2 Samuel (Kannada)

2 Samuel (Kannada)

1

1:1b.2SA.001.001 ಸೌಲನು ಸತ್ತ ತರುವಾಯ ದಾವೀದನು ಅಮಾಲೇಕ್ಯರನ್ನು ಸಂಹರಿಸಿ ಚಿಕ್ಲಗಿಗೆ ತಿರಿಗಿ ಬಂದು ಎರಡು ದಿವಸ ಅಲ್ಲಿ ಇದ್ದ ತರುವಾಯ ಏನಾಯಿತಂದರೆ

1:2b.2SA.001.002 ಇಗೋ, ಮೂರನೆಯ ದಿನದಲ್ಲಿ ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣು ಹಾಕಿಕೊಂಡಿದ್ದ ಒಬ್ಬ ಮನುಷ್ಯನು ಸೌಲನ ಬಳಿಯಿಂದಲೂ ಪಾಳೆಯಿಂದಲೂ ಹೊರಟು ದಾವೀ ದನ ಬಳಿಗೆ ಬಂದು ನೆಲದ ಮೇಲೆ ಬಿದ್ದು ಅವ ನಿಗೆ ವಂದಿಸಿದನು.

1:3b.2SA.001.003 ದಾವೀದನು ಅವನಿಗೆ--ನೀನು ಎಲ್ಲಿಂದ ಬಂದಿ ಅಂದನು. ಅದಕ್ಕವನು--ಇಸ್ರಾಯೇ ಲಿನ ದಂಡಿನಿಂದ ತಪ್ಪಿಸಿಕೊಂಡು ಬಂದೆನು ಅಂದನು.

1:4b.2SA.001.004 ದಾವೀದನು ಅವನಿಗೆ--ನಡೆದ ವರ್ತಮಾನವೇನು? ನೀನು ನನಗೆ ತಿಳಿಸು ಅಂದನು. ಅವನು--ಜನರು ಯುದ್ಧದಿಂದ ಓಡಿಹೋದರು; ಜನರಲ್ಲಿ ಅನೇಕರು ಸತ್ತುಬಿದ್ದರು; ಸೌಲನೂ ಅವನ ಮಗನಾದ ಯೋನಾ ತಾನನೂ ಸತ್ತರು ಅಂದನು.

1:5b.2SA.001.005 ದಾವೀದನು ತನಗೆ ವರ್ತಮಾನ ಹೇಳಿದ ಯೌವನಸ್ಥನಿಗೆ--ಸೌಲನೂ ಅವನ ಮಗನಾದ ಯೋನಾತಾನನೂ ಸತ್ತರೆಂದು ನಿನಗೆ ಹೇಗೆ ತಿಳಿಯಿತು ಅಂದನು.

1:6b.2SA.001.006 ಅವನಿಗೆ ವರ್ತ ಮಾನ ಹೇಳಿದ ಯೌವನಸ್ಥನು--ನಾನು ಸುಮ್ಮನೆ ಗಿಲ್ಬೋವ ಬೆಟ್ಟದಲ್ಲಿ ಬಂದಿದ್ದೆನು. ಅಲ್ಲಿ ಇಗೋ, ಸೌಲನು ತನ್ನ ಈಟಿಯ ಮೇಲೆ ಆತುಕೊಂಡಿದ್ದನು. ಆಗ ಇಗೋ, ರಥಗಳೂ ರಾಹುತರೂ ಅವನನ್ನು ಹಿಂದಟ್ಟಿಕೊಂಡೇ ಇದ್ದರು.

1:7b.2SA.001.007 ಅವನು ಹಿಂದಕ್ಕೆ ತಿರುಗಿ ನೋಡಿ ನನ್ನನ್ನು ಕಂಡು ಕರೆದನು. ಆಗ ನಾನುಇಗೋ, ಇದ್ದೇನೆ ಅಂದೆನು.

1:8b.2SA.001.008 ಆಗ ಅವನು ನೀನ್ಯಾರು ಅಂದನು.

1:9b.2SA.001.009 ನಾನು ಅವನಿಗೆ--ಅಮಾಲೇಕ್ಯನು ಎಂದು ಹೇಳಿದೆನು. ಅವನು ನನಗೆ -- ನೀನು ದಯಮಾಡಿ ನನ್ನ ಮೇಲೆ ನಿಂತು ನನ್ನನ್ನು ಕೊಂದುಹಾಕು; ಯಾಕಂದರೆ ನನ್ನ ಪ್ರಾಣವು ಇನ್ನೂ ನನ್ನಲ್ಲಿ ಪೂರ್ಣ ವಾಗಿರುವದರಿಂದ ಸಂಕಟವು ನನ್ನನ್ನು ಹಿಡಿಯಿತು ಅಂದನು.

1:10b.2SA.001.010 ಆದದರಿಂದ ಇವನು ಬಿದ್ದ ತರುವಾಯ ಬದುಕಲಾರನೆಂದು ನಾನು ತಿಳಿದು ಅವನ ಮೇಲೆ ನಿಂತು ಅವನನ್ನು ಕೊಂದುಹಾಕಿದೆನು. ಅವನ ತಲೆಯ ಮೇಲಿದ್ದ ಕಿರೀಟವನ್ನೂ ಅವನ ಕೈಯಲ್ಲಿದ್ದ ಕಡಗ ವನ್ನೂ ತೆಗೆದುಕೊಂಡು ಅವುಗಳನ್ನು ನನ್ನ ಒಡೆಯನಿಗೆ ಇಲ್ಲಿ ತಂದೆನು ಅಂದನು.

1:11b.2SA.001.011 ಆಗ ದಾವೀದನೂ ಅವನ ಸಂಗಡ ಇದ್ದ ಎಲ್ಲಾ ಜನರೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು

1:12b.2SA.001.012 ಸೌಲನೂ ಅವನ ಮಗನಾದ ಯೋನಾತಾನನೂ ಇಸ್ರಾಯೇಲಿನ ಮನೆಯವರೂ ಕರ್ತನ ಜನರೂ ಕತ್ತಿಯಿಂದ ಬಿದ್ದ ಕಾರಣ ಅವರಿ ಗೋಸ್ಕರ ಗೋಳಾಡಿ ಅತ್ತು ಸಾಯಂಕಾಲದ ವರೆಗೂ ಉಪವಾಸವಾಗಿದ್ದರು.

1:13b.2SA.001.013 ಆದರೆ ದಾವೀದನು ಅದನ್ನು ತನಗೆ ತಿಳಿಸಿದ ಯೌವನಸ್ಥನನ್ನು--ನೀನು ಎಲ್ಲಿಯ ವನು ಎಂದು ಕೇಳಿದಾಗ ಅವನು--ನಾನು ಅನ್ಯನ ಮಗನಾದ ಅಮಾಲೇಕ್ಯನು ಅಂದನು.

1:14b.2SA.001.014 ಆಗ ದಾವೀ ದನು ಅವನಿಗೆ--ಕರ್ತನ ಅಭಿಷಿಕ್ತನನ್ನು ಸಂಹರಿಸಲು ನಿನ್ನ ಕೈಚಾಚುವದಕ್ಕೆ ಭಯಪಡದೆ ಇದ್ದದ್ದು ಹೇಗೆ ಎಂದು ಹೇಳಿದನು.

1:15b.2SA.001.015 ದಾವೀದನು ಯೌವನಸ್ಥ ನೊಬ್ಬನನ್ನು ಕರೆದು--ನೀನು ಹತ್ತಿರ ಹೋಗಿ ಅವನ ಮೇಲೆ ಬೀಳು ಅಂದನು. ಹಾಗೆಯೇ ಅವನು ಅವನನ್ನು ಹೊಡೆದನು; ಅವನು ಸತ್ತನು.

1:16b.2SA.001.016 ದಾವೀದನು ಅವ ನಿಗೆ--ಕರ್ತನ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯಿ ನಿನಗೆ ವಿರೋಧವಾಗಿ ಸಾಕ್ಷಿಹೇಳಿದ್ದರಿಂದ ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರಲಿ ಅಂದನು.

1:17b.2SA.001.017 ಆಗ ದಾವೀದನು ಸೌಲನ ಮೇಲೆಯೂ ಅವನ ಮಗನಾದ ಯೋನಾತಾನನ ಮೇಲೆಯೂ ಗೋಳಾಟ ದಿಂದ ಈ ಗೀತೆ ಹಾಡಿ ಗೋಳಾಡಿದನು.

1:18b.2SA.001.018 ಇದ ಲ್ಲದೆ ದಾವೀದನು ಬಿಲ್ಲೆಂಬ ಗೀತವನ್ನು ಯೆಹೂದನ ಮಕ್ಕಳಿಗೆ ಕಲಿಸಬೇಕೆಂದು ಹೇಳಿದನು; ಇಗೋ, ಇದು ಯಾಷಾರಿನ ಪುಸ್ತಕದಲ್ಲಿ ಬರೆಯಲ್ಪಟ್ಟಿದೆ,

1:19b.2SA.001.019 ಏನಂದರೆ--ಇಸ್ರಾಯೇಲಿನ ಸೌಂದರ್ಯವು ಉನ್ನತಸ್ಥಳಗಳ ಮೇಲೆ ಕೊಲ್ಲಲ್ಪಟ್ಟಿದೆ. ಪರಾಕ್ರಮ ಶಾಲಿಗಳು ಹೇಗೆ ಬಿದ್ದರು!

1:20b.2SA.001.020 ಗತ್‌ ಊರಿನಲ್ಲಿ ತಿಳಿಸಬೇಡಿರಿ. ಅಷ್ಕೆಲೋನಿನ ಬೀದಿಗಳಲ್ಲಿ ಸಾರ ಬೇಡಿರಿ. ಫಿಲಿಷ್ಟಿಯರ ಕುಮಾರ್ತೆಯರು ಸಂತೋಷ ಪಟ್ಟಾರಲ್ಲಾ; ಸುನ್ನತಿ ಇಲ್ಲದವರ ಕುಮಾರ್ತೆಯರು ಉತ್ಸಾಹ ಪಟ್ಟಾರಲ್ಲಾ.

1:21b.2SA.001.021 ಗಿಲ್ಬೋವ ಬೆಟ್ಟಗಳೇ, ನಿಮ್ಮ ಮೇಲೆ ಮಂಜೂ ಮಳೆಯೂ ಅರ್ಪಣೆಗಳ ಹೊಲ ಗಳೂ ಇಲ್ಲದೆ ಹೋಗಲಿ. ಯಾಕಂದರೆ ಅಲ್ಲಿ ಪರಾ ಕ್ರಮಶಾಲಿಗಳ ಗುರಾಣಿಯೂ ಸೌಲನ ಗುರಾಣಿಯೂ ಅವಮಾನವಾಗಿ ಬಿದ್ದವು. ಸೌಲನು ಎಣ್ಣೆಯಿಂದ ಅಭಿಷೇಕಿಸಲ್ಪಡದವನ ಹಾಗಾದನು.

1:22b.2SA.001.022 ಕೊಲ್ಲಲ್ಪಟ್ಟ ವರ ರಕ್ತದಿಂದಲೂ ಬಲಶಾಲಿಗಳ ಕೊಬ್ಬಿನಿಂದಲೂ ಯೋನಾತಾನನ ಬಿಲ್ಲು ಹಿಂದಕ್ಕೆ ತಿರುಗಲಿಲ್ಲ; ಸೌಲನ ಕತ್ತಿ ಬರಿದಾಗಿ ತಿರಿಗಿ ಬರಲಿಲ್ಲ.

1:23b.2SA.001.023 ಸೌಲನೂ ಯೋನಾತಾನನೂ ಜೀವದಿಂದಿದ್ದಾಗ ಪ್ರಿಯಕರವಾಗಿಯೂ ಸಂತೋಷಕರವಾಗಿಯೂ ಇದ್ದರು; ತಮ್ಮ ಮರಣದಲ್ಲಿಯೂ ಅಗಲಿ ಹೋಗದೆ ಇದ್ದರು. ಅವರು ಹದ್ದುಗಳಿಗಿಂತ ವೇಗವುಳ್ಳವರೂ ಸಿಂಹಗಳಿಗಿಂತ ಬಲ ವುಳ್ಳವರೂ ಆಗಿದ್ದರು.

1:24b.2SA.001.024 ಇಸ್ರಾಯೇಲಿನ ಕುಮಾರ್ತೆ ಯರೇ, ಸೌಲನಿಗೋಸ್ಕರ ಅಳಿರಿ, ನಿಮಗೆ ರಕ್ತಾಂಬರ ವನ್ನು ಸಂಭ್ರಮವಾಗಿ ತೊಡಿಸಿದನಲ್ಲಾ; ನಿಮ್ಮ ಉಡುಗೆ ಗಳ ಮೇಲೆ ಚಿನ್ನದ ಆಭರಣಗಳನ್ನು ಧರಿಸುವಂತೆ ಮಾಡಿದನಲ್ಲಾ.

1:25b.2SA.001.025 ಪರಾಕ್ರಮಶಾಲಿಗಳು ಹೇಗೆ ಯುದ್ಧದಲ್ಲಿ ಬಿದ್ದಿದ್ದಾರೆ! ಯೋನಾತಾನನೇ, ನೀನು ನಿನ್ನ ಉನ್ನತಸ್ಥಳಗಳಲ್ಲಿ ಕೊಲ್ಲಲ್ಪಟ್ಟಿ.

1:26b.2SA.001.026 ನನ್ನ ಸಹೋದರನಾದ ಯೋನಾತಾನನೇ, ನಾನು ನಿನ ಗೋಸ್ಕರ ಸಂಕಟಪಡುತ್ತೇನೆ; ನೀನು ನನಗೆ ಬಹಳ ಮನೋಹರನಾಗಿದ್ದೀ. ನಿನ್ನ ಪ್ರೀತಿ ನನ್ನ ಮೇಲೆ ಆಶ್ಚರ್ಯವಾಗಿತ್ತು. ಅದು ಸ್ತ್ರೀಯರ ಪ್ರೀತಿಗಿಂತ ಅಧಿಕವಾದದ್ದು.ಪರಾಕ್ರಮಶಾಲಿಗಳು ಹೇಗೆ ಯುದ್ಧದಲ್ಲಿ ಬಿದ್ದಿದ್ದಾರೆ; ಯುದ್ಧದ ಆಯುಧಗಳು ನಾಶವಾಗಿ ಹೋದವಲ್ಲಾ.

1:27b.2SA.001.027 ಪರಾಕ್ರಮಶಾಲಿಗಳು ಹೇಗೆ ಯುದ್ಧದಲ್ಲಿ ಬಿದ್ದಿದ್ದಾರೆ; ಯುದ್ಧದ ಆಯುಧಗಳು ನಾಶವಾಗಿ ಹೋದವಲ್ಲಾ.

2

2:1b.2SA.002.001 ಇದಾದ ಮೇಲೆ ದಾವೀದನು ಕರ್ತನನ್ನು -- ಯೆಹೂದದ ಪಟ್ಟಣಗಳಲ್ಲಿ ಯಾವದಕ್ಕಾದರೂ ಹೋಗಲೋ ಎಂದು ಕೇಳಿದನು. ಕರ್ತನು ಅವನಿಗೆ--ಹೋಗು ಅಂದನು. ದಾವೀ ದನು--ನಾನು ಎಲ್ಲಿಗೆ ಹೋಗಲಿ ಎಂದು ಕೇಳಿದಕ್ಕೆ ಆತನು -- ಹೆಬ್ರೋನಿಗೆ ಅಂದನು.

2:2b.2SA.002.002 ಹಾಗೆಯೇ ದಾವೀದನೂ ಅವನ ಇಬ್ಬರು ಹೆಂಡತಿಯರಾದ ಇಜ್ರೇಲಿಯವಳಾಗಿರುವ ಅಹಿನೋವಮಳೂ ಕರ್ಮೆ ಲ್ಯನನಾದ ನಾಬಾಲನ ಹೆಂಡತಿಯಾಗಿದ್ದ ಅಬೀ ಗೈಲಳೂ ಅಲ್ಲಿಗೆ ಹೋದರು.

2:3b.2SA.002.003 ಇದಲ್ಲದೆ ತನ್ನ ಸಂಗಡ ಇದ್ದ ಜನರನ್ನೂ ಅವರವರ ಮನೆಯವರನ್ನೂ ಕರಕೊಂಡು ಹೋದನು; ಅವರು ಹೆಬ್ರೋನಿನ ಪಟ್ಟಣ ಗಳಲ್ಲಿ ವಾಸವಾಗಿದ್ದರು.

2:4b.2SA.002.004 ಆಗ ಯೆಹೂದ ಜನರು ಬಂದು ಅಲ್ಲಿ ದಾವೀದನನ್ನು ಯೆಹೂದನ ಮನೆಯವರ ಮೇಲೆ ಅರಸನನ್ನಾಗಿ ಅಭಿಷೇಕಿಸಿದರು.

2:5b.2SA.002.005 ಯಾಬೇಷ್‌ಗಿಲ್ಯಾದಿನವರು ಸೌಲನನ್ನು ಹೂಣಿಟ್ಟ ರೆಂದು ದಾವೀದನಿಗೆ ತಿಳಿಸಿದಾಗ ಅವನು ದೂತರನ್ನು ಕಳುಹಿಸಿ--ನೀವು ನಿಮ್ಮ ಯಜಮಾನನಾದ ಸೌಲನಿಗೆ ಈ ದಯೆಯನ್ನು ತೋರಿಸಿ ಅವನನ್ನು ಹೂಣಿಟ್ಟ ಕಾರಣ ಕರ್ತನಿಂದ ನಿಮಗೆ ಆಶೀರ್ವಾದವಾಗಲಿ.

2:6b.2SA.002.006 ಈಗ ಕರ್ತನು ನಿಮಗೆ ದಯೆಯನ್ನೂ ಸತ್ಯವನ್ನೂ ತೋರಿಸಲಿ. ನೀವು ಈ ಕಾರ್ಯವನ್ನು ಮಾಡಿದ್ದರಿಂದ ನಾನು ನಿಮಗೆ ಪ್ರತ್ಯುಪಕಾರ ಮಾಡುವೆನು.

2:7b.2SA.002.007 ನೀವು ಪರಾ ಕ್ರಮಶಾಲಿಗಳಾಗಿದ್ದು ನಿಮ್ಮ ಕೈಗಳು ಬಲವಾಗಿರಲಿ; ನಿಮ್ಮ ಯಜಮಾನನಾದ ಸೌಲನು ಸತ್ತುಹೋದನು; ಯೆಹೂದನ ಮನೆಯವರು ನನ್ನನ್ನು ತಮ್ಮ ಮೇಲೆ ಅರಸನನ್ನಾಗಿ ಅಭಿಷೇಕಮಾಡಿದರು ಅಂದನು.

2:8b.2SA.002.008 ಆದರೆ ಸೌಲನ ಸೈನ್ಯಾಧಿಪತಿಯಾದ ನೇರನ ಮಗ ನಾಗಿರುವ ಅಬ್ನೇರನು ಸೌಲನ ಮಗನಾದ ಈಷ್ಬೋ ಶೆತನನ್ನು ಮಹನಯಿಮಿಗೆ ಕರಕೊಂಡು ಹೋಗಿ

2:9b.2SA.002.009 ಅಲ್ಲಿ ಅವನನ್ನು ಗಿಲ್ಯಾದ್ಯರ ಮೇಲೆಯೂ ಆಶೇರ್ಯರ ಮೇಲೆಯೂ ಇಜ್ರೇಲಿಯರ ಮೇಲೆಯೂ ಎಫ್ರಾ ಯಾಮ್ಯರ ಮೇಲೆಯೂ ಬೆನ್ಯಾವಿಾನ್ಯರ ಮೇಲೆಯೂ ಇಸ್ರಾಯೇಲ್ಯರೆಲ್ಲರ ಮೇಲೆಯೂ ಅರಸನನ್ನಾಗಿ ಮಾಡಿ ದನು.

2:10b.2SA.002.010 ಸೌಲನ ಮಗನಾದ ಈಷ್ಬೋಶೆತನು ಇಸ್ರಾಯೇಲಿನ ಮೇಲೆ ಆಳುವದಕ್ಕೆ ಆರಂಭಿಸಿದಾಗ ನಾಲ್ವತ್ತು ವರುಷ ಪ್ರಾಯದವನಾಗಿದ್ದು ಎರಡು ವರುಷ ಆಳಿದನು. ಆದರೆ ಯೆಹೂದನ ಮನೆಯವರು ದಾವೀದನನ್ನು ಹಿಂಬಾಲಿಸಿದರು.

2:11b.2SA.002.011 ದಾವೀದನು ಹೆಬ್ರೋನಿನಲ್ಲಿ ಯೆಹೂದನ ಮನೆಯವರ ಮೇಲೆ ಅರಸನಾಗಿದ್ದ ದಿವಸಗಳು ಏಳು ವರುಷ ಆರು ತಿಂಗಳು.

2:12b.2SA.002.012 ನೇರನ ಮಗನಾಗಿರುವ ಅಬ್ನೇರನೂ ಸೌಲನ ಮಗನಾದ ಈಷ್ಬೋಶೆತನ ಸೇವಕರೂ ಮಹನಯಿಮಿ ನಿಂದ ಹೊರಟು ಗಿಬ್ಯೋನಿಗೆ ಬಂದರು.

2:13b.2SA.002.013 ಹಾಗೆಯೇ ಚೆರೂಯಳ ಮಗನಾದ ಯೋವಾಬನೂ ದಾವೀದನ ಸೇವಕರೂ ಹೊರಟು ಗಿಬ್ಯೋನಿನ ಕೊಳದ ಬಳಿಯಲ್ಲಿ ಕೂಡಿಬಂದರು; ಅವರು ಕೊಳದ ಆಚೆಯಲ್ಲಿಯೂ ಇವರು ಕೊಳದ ಈಚೆಯಲ್ಲಿಯೂ ಕೂತುಕೊಂಡರು.

2:14b.2SA.002.014 ಆಗ ಅಬ್ನೇರನು ಯೋವಾಬನಿಗೆ--ಯೌವನಸ್ಥರು ಎದ್ದು ನಮ್ಮ ಮುಂದೆ ಆಡಲಿ ಅಂದನು. ಅದಕ್ಕೆ ಯೋವಾಬನು--ಅವರು ಏಳಲಿ ಅಂದನು.

2:15b.2SA.002.015 ಹಾಗೆ ಯೇ ಸೌಲನ ಮಗನಾದ ಈಷ್ಬೋಶೆತನ ಕಡೆಯವ ರಾದ ಬೆನ್ಯಾವಿಾನ್ಯರಲ್ಲಿ ಹನ್ನೆರಡು ಮಂದಿಯೂ ದಾವೀದನ ಸೇವಕರಲ್ಲಿ ಹನ್ನೆರಡು ಮಂದಿಯೂ ಎದ್ದು ಹೊರಟು ಒಬ್ಬರ ತಲೆಯನ್ನು ಒಬ್ಬರು ಹಿಡಿದು ಒಬ್ಬರ ಪಕ್ಕೆಯಲ್ಲಿ ಒಬ್ಬರು ಕತ್ತಿಯನ್ನು ತಿವಿದು ಎಲ್ಲರೂ ಸತ್ತುಹೋದರು.

2:16b.2SA.002.016 ಆದದರಿಂದ ಗಿಬ್ಯೋನಿ ನಲ್ಲಿರುವ ಆ ಸ್ಥಳಕ್ಕೆ ಹೆಲ್ಕಚ್ಚೂರಿಮ್‌ ಎಂಬ ಹೆಸರಾ ಯಿತು.

2:17b.2SA.002.017 ಇದಲ್ಲದೆ ಆ ದಿನದಲ್ಲಿ ಅಘೋರವಾದ ಯುದ್ಧವಾಯಿತು. ಅಬ್ನೇರನೂ ಇಸ್ರಾಯೇಲ್‌ ಜನ ರೂ ದಾವೀದನ ಸೇವಕರಿಂದ ಹೊಡೆಯಲ್ಪಟ್ಟರು.

2:18b.2SA.002.018 ಚೆರೂಯಳ ಮೂವರು ಮಕ್ಕಳಾದ ಯೋವಾ ಬನೂ ಅಬಿಷೈಯೂ ಅಸಾಹೇಲನೂ ಅಲ್ಲಿ ಇದ್ದರು. ಅಸಾಹೇಲನು ಅಡವಿಯ ಜಿಂಕೆಯ ಹಾಗೆ ಪಾದ ತ್ವರಿತನಾಗಿದ್ದನು.

2:19b.2SA.002.019 ಅಸಾಹೇಲನು ಅಬ್ನೇರನನ್ನು ಹಿಂದಟ್ಟಿ ಅಬ್ನೇರನನ್ನು ಹಿಂದಟ್ಟುವದರಲ್ಲಿ ಬಲಗಡೆ ಗಾದರೂ ಎಡಗಡೆಗಾದರೂ ತಿರುಗದೆ ಇದ್ದನು.

2:20b.2SA.002.020 ಆದದರಿಂದ ಅಬ್ನೇರನು ಹಿಂದಕ್ಕೆ ತಿರುಗಿ ನೋಡಿನೀನು ಅಸಾಹೇಲನಲ್ಲವೇ ಅಂದನು.

2:21b.2SA.002.021 ಅದಕ್ಕವನುನಾನೇ ಅಂದನು. ಆಗ ಅಬ್ನೇರನು ಅವನಿಗೆ--ನೀನು ಬಲಗಡೆಗಾದರೂ ಎಡಗಡೆಗಾದರೂ ತಿರುಗಿ ಯೌವ ನಸ್ಥರಲ್ಲಿ ಒಬ್ಬನನ್ನು ಹಿಡಿದು ಅವನ ಆಯುಧಗಳನ್ನು ತಕ್ಕೋ ಅಂದನು. ಆದರೆ ಅಸಾಹೇಲನು ಅವನ ಹಿಂದಿನಿಂದ ತಿರುಗಲೊಲ್ಲದೆ ಇದ್ದನು.

2:22b.2SA.002.022 ಅಬ್ನೇರನು ಅಸಾಹೇಲನಿಗೆ--ನೀನು ನನ್ನನ್ನು ಹಿಂಬಾಲಿಸುವದನ್ನು ಬಿಟ್ಟು ತಿರುಗಿ ಹೋಗು; ನಾನು ನಿನ್ನನ್ನು ನೆಲಕ್ಕೆ ಹೊಡೆದು ಬಿಡುವದು ಯಾಕೆ? ನಾನು ನಿನ್ನ ಸಹೋ ದರನಾದ ಯೋವಾಬನಿಗೆ ಮುಖತೋರಿಸುವದು ಹೇಗೆ ಅಂದನು.

2:23b.2SA.002.023 ಆದರೆ ಅವನು ಹೋಗುವದಕ್ಕೆ ಒಪ್ಪದೆಹೋದದರಿಂದ ಅಬ್ನೇರನು ತನ್ನ ಬರ್ಜಿಯ ಹಿಂಭಾಗದ ಮೊನೆಯಿಂದ ಅವನ ಪಕ್ಕೆಯ ಐದನೇ ಎಲುಬಿನ ಕೆಳಗೆ ಹಾಯುವಂತೆ ತಿವಿದನು; ಅದು ಅವನ ಹಿಂದಿನಿಂದ ಹೊರಗೆ ಬಂತು. ಅವನು ಅಲ್ಲಿ ಬಿದ್ದು ಅದೇ ಸ್ಥಳದಲ್ಲಿ ಸತ್ತನು. ಆಗ ಏನಾಯಿಯತಂದರೆ ಅಸಾಹೇಲನು ಬಿದ್ದು ಸತ್ತ ಸ್ಥಳಕ್ಕೆ ಬಂದವರೆಲ್ಲರು ಅಲ್ಲಿಯೇ ಸುಮ್ಮನೆ ನಿಂತರು.

2:24b.2SA.002.024 ಆದರೆ ಯೋವಾ ಬನೂ ಅಬಿಷೈಯೂ ಅಬ್ನೇರನನ್ನು ಹಿಂದಟ್ಟಿ ಸೂರ್ಯಅಸ್ತಮಿಸುವ ವರೆಗೆ ಗಿಬ್ಯೋನಿನ ಅರಣ್ಯ ಮಾರ್ಗದ ಅಂಚಾದ ಗೀಯಕ್ಕೆ ಎದುರಾಗಿರುವ ಅಮ್ಮಾ ಎಂಬ ಗುಡ್ಡದ ಮಟ್ಟಿಗೂ ಬಂದರು.

2:25b.2SA.002.025 ಆಗ ಅಬ್ನೇರನ ಹಿಂದೆ ಬೆನ್ಯಾವಿಾನನ ಮಕ್ಕಳು ಒಟ್ಟಾಗಿ ಬಂದು ಸೈನ್ಯವಾಗಿ ಕೂಡಿಕೊಂಡು ಒಂದು ಗುಡ್ಡದ ಶಿಖರದಲ್ಲಿ ನಿಂತಿದ್ದರು.

2:26b.2SA.002.026 ಆಗ ಅಬ್ನೇರನು ಯೋವಾಬನಿಗೆ--ಕತ್ತಿಯು ಯಾವಾಗಲೂ ನುಂಗಿಬಿಡುವದೋ? ಅಂತ್ಯ ದಲ್ಲಿ ಅದು ಕಹಿಯಾಗಿರುವದೆಂದು ನಿನಗೆ ಗೊತ್ತಾಗು ವದಿಲ್ಲವೋ? ತಮ್ಮ ಸಹೋದರರನ್ನು ಹಿಂಬಾಲಿಸು ವದನ್ನು ಬಿಟ್ಟು ಹಿಂದಕ್ಕೆ ತಿರುಗುವ ಹಾಗೆ ಜನರಿಗೆ ಎಷ್ಟು ಕಾಲ ಹೇಳದೆ ಇರುವಿ ಎಂದು ಕೂಗಿ ಹೇಳಿದನು.

2:27b.2SA.002.027 ಅದಕ್ಕೆ ಯೋವಾಬನು--ದೇವರ ಜೀವದಾಣೆ, ಉದಯದಲ್ಲಿ ನೀನು ಮಾತನಾಡದೆ ಹೋದರೆ ನಿಶ್ಚಯ ವಾಗಿ ಜನರಲ್ಲಿ ಪ್ರತಿ ಮನುಷ್ಯನು ತನ್ನ ಸಹೋ ದರನ ಹಿಂದಿನಿಂದ ತಿರುಗಿ ಹೋಗುತ್ತಿದ್ದನು ಅಂದನು.

2:28b.2SA.002.028 ಹೀಗೆ ಯೋವಾಬನು ತುತೂರಿಯನ್ನು ಊದಿ ದನು. ಆಗ ಜನರೆಲ್ಲರೂ ನಿಂತರು. ಇಸ್ರಾಯೇಲನ್ನು ಹಿಂದಟ್ಟಲಿಲ್ಲ ಮತ್ತು ಯುದ್ಧಮಾಡಲಿಲ್ಲ.

2:29b.2SA.002.029 ಅಬ್ನೇ ರನೂ ಅವನ ಜನರೂ ಆ ರಾತ್ರಿಯೆಲ್ಲಾ ಬೈಲಿನಲ್ಲಿ ನಡೆದು ಯೊರ್ದನನ್ನು ದಾಟಿ ಬಿಥ್ರೋನಿನಲ್ಲೆಲ್ಲಾ ಹಾದು ಮಹನಯಿಮಿಗೆ ಬಂದರು.

2:30b.2SA.002.030 ಯೋವಾಬನು ಅಬ್ನೇರನ ಹಿಂದಿನಿಂದ ತಿರುಗಿ ಜನರೆಲ್ಲರನ್ನು ಕೂಡಿಸಿಕೊಂಡಾಗ ದಾವೀದನ ಸೇವಕ ರಲ್ಲಿ ಹತ್ತೊಂಭತ್ತು ಜನರೂ ಅಸಾಹೇಲನೂ ಕಡಿಮೆ ಯಾಗಿದ್ದರು.

2:31b.2SA.002.031 ಆದರೆ ದಾವೀದನ ಸೇವಕರು ಬೆನ್ಯಾ ವಿಾನ್ಯರಲ್ಲಿಯೂ ಅಬ್ನೇರನ ಜನರಲ್ಲಿಯೂ ಮುನ್ನೂರ ಅರವತ್ತು ಜನರನ್ನು ಹೊಡೆದದ್ದರಿಂದ ಅವರು ಸತ್ತರು.ಅವರು ಅಸಾಹೇಲನನ್ನು ಎತ್ತಿ ಕೊಂಡು ಬೇತ್ಲೆಹೇಮಿನಲ್ಲಿರುವ ಅವನ ತಂದೆಯ ಸಮಾಧಿಯಲ್ಲಿ ಹೂಣಿಟ್ಟರು. ಯೋವಾಬನೂ ಅವನ ಜನರೂ ರಾತ್ರಿಯೆಲ್ಲಾ ನಡೆದು ಉದಯವಾದಾಗ ಹೆಬ್ರೋನಿಗೆ ಬಂದರು.

2:32b.2SA.002.032 ಅವರು ಅಸಾಹೇಲನನ್ನು ಎತ್ತಿ ಕೊಂಡು ಬೇತ್ಲೆಹೇಮಿನಲ್ಲಿರುವ ಅವನ ತಂದೆಯ ಸಮಾಧಿಯಲ್ಲಿ ಹೂಣಿಟ್ಟರು. ಯೋವಾಬನೂ ಅವನ ಜನರೂ ರಾತ್ರಿಯೆಲ್ಲಾ ನಡೆದು ಉದಯವಾದಾಗ ಹೆಬ್ರೋನಿಗೆ ಬಂದರು.

3

3:1b.2SA.003.001 ಸೌಲನ ಮನೆಗೂ ದಾವೀದನ ಮನೆಗೂ ಬಹು ದಿವಸಗಳು ಯುದ್ಧವುನಡೆಯಿತು. ದಾವೀದನು ಬಲವಾಗುತ್ತಾ ಬಂದನು. ಸೌಲನ ಮನೆ ಯವರು ಬಲಹೀನರಾಗುತ್ತಾ ಹೋದರು.

3:2b.2SA.003.002 ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಮಕ್ಕಳು ಯಾರಂದರೆ, ಇಜ್ರೇಲಿನವಳಾದ ಅಹೀನೋವಮ ಳಿಂದ ಹುಟ್ಟಿದ ತನ್ನ ಚೊಚ್ಚಲ ಮಗನಾದ ಅಮ್ನೋ ನನೂ

3:3b.2SA.003.003 ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳಿಂದ ಹುಟ್ಟಿದ ಅವನ ಎರಡನೇ ಮಗನಾದ ಕಿಲಾಬನೂ ಗೆಷೂರಿನ ಅರಸನಾಗಿರುವ ತಲ್ಮೈಯನ ಮಗಳಾದ ಮಾಕಳಿಂದ ಹುಟ್ಟಿದ ಅವನ ಮೂರನೇ ಮಗನಾದ ಅಬ್ಷಾಲೋಮನೂ

3:4b.2SA.003.004 ಹಗ್ಗೀತಳಿಂದ ಹುಟ್ಟಿದ ನಾಲ್ಕನೇ ಮಗನಾದ ಅದೋನೀಯನೂ ಅಬೀಟಲ ಳಿಂದ ಹುಟ್ಟಿದ ಐದನೇ ಮಗನಾದ ಶೆಫಟ್ಯನೂ

3:5b.2SA.003.005 ದಾವೀದನ ಹೆಂಡತಿಯಾದ ಎಗ್ಲಳಿಂದ ಹುಟ್ಟಿದ ಆರನೇ ಮಗನಾದ ಇತ್ರಾಮನೂ. ಇವರು ಹೆಬ್ರೋನಿ ನಲ್ಲಿ ದಾವೀದನಿಗೆ ಹುಟ್ಟಿದವರು.

3:6b.2SA.003.006 ಸೌಲನ ಮನೆಗೂ ದಾವೀದನ ಮನೆಗೂ ಯುದ್ಧವುನಡೆಯುತ್ತಿರುವಾಗ ಏನಾಯಿತಂದರೆ, ಅಬ್ನೇ ರನು ಸೌಲನ ಮನೆಗಾಗಿ ತನ್ನನ್ನು ಬಲಪಡಿಸಿ ಕೊಂಡನು.

3:7b.2SA.003.007 ಸೌಲನಿಗೆ ಅಯಾಹನ ಮಗಳಾದ ರಿಚ್ಪಳೆಂಬ ಉಪಪತ್ನಿ ಇದ್ದಳು. ಈಷ್ಬೋಶೆತನು ಅಬ್ನೇರ ನಿಗೆ--ನೀನು ನನ್ನ ತಂದೆಯ ಉಪಪತ್ನಿಯ ಬಳಿಗೆ ಪ್ರವೇಶಿಸಿದ್ದೇನು ಅಂದನು.

3:8b.2SA.003.008 ಆಗ ಅಬ್ನೇರನು ಈಷ್ಬೋ ಶೆತನ ಮಾತುಗಳಿಗೆ ಬಹು ಕೋಪಗೊಂಡು--ನಾನು ನಿನ್ನನ್ನು ದಾವೀದನ ಕೈಯಲ್ಲಿ ಒಪ್ಪಿಸಿಕೊಡದೆ ಈ ದಿನದ ವರೆಗೂ ಯೆಹೂದವನ್ನು ವಿರೋಧಿಸಿ ನಿನ್ನ ತಂದೆ ಯಾದ ಸೌಲನ ಮನೆಗೂ ಅವನ ಸಹೋದರರಿಗೂ ಸ್ನೇಹಿತರಿಗೂ ದಯೆತೋರಿಸಿದ ನನ್ನನ್ನು ನೀನು ಈ ಹೊತ್ತು ಈ ಸ್ತ್ರೀಗೋಸ್ಕರ ನನ್ನಲ್ಲಿ ಅಕ್ರಮ ಎಣಿಸು ವದಕ್ಕೆ ನಾನು ನಾಯಿಯ ತಲೆಯೋ?

3:9b.2SA.003.009 ನಾನು ಸೌಲನ ಮನೆಯಿಂದ ರಾಜ್ಯವನ್ನು ತಪ್ಪಿಸಿ ಕರ್ತನು ದಾವೀದನಿಗೆ ಆಣೆ ಇಟ್ಟ ಪ್ರಕಾರವೇ ದಾವೀದನ ಸಿಂಹಾಸನವನ್ನು ದಾನಿನಿಂದ ಬೇರ್ಷೆಬದ ವರೆಗೂ ಇರುವ ಇಸ್ರಾಯೇಲಿನ ಮೇಲೆಯೂ ಯೆಹೂದದ ಮೇಲೆಯೂ ಸ್ಥಿರಪಡಿಸುವ ಹಾಗೆ

3:10b.2SA.003.010 ನಾನು ಮಾಡದೆ ಇದ್ದರೆ ದೇವರು ಅಬ್ನೇರನಿಗೆ ಹೀಗೆಯೂ ಮತ್ತು ಅಧಿಕವಾಗಿಯೂ ಮಾಡಲಿ ಅಂದನು.

3:11b.2SA.003.011 ಅವನು ಅಬ್ನೇರನಿಗೆ ಭಯಪಟ್ಟದ್ದರಿಂದ ಒಂದು ಮಾತಾದರೂ ಪ್ರತ್ಯುತ್ತರ ಹೇಳಲಾರದೆ ಇದ್ದನು.

3:12b.2SA.003.012 ಆಗ ಅಬ್ನೇರನು ತನ್ನ ಪರವಾಗಿ ದಾವೀದನ ಬಳಿಗೆ ದೂತರನ್ನು ಕಳು ಹಿಸಿ--ದೇಶವು ಯಾರದು? ಇದಲ್ಲದೆ--ನೀನು ನನ್ನ ಸಂಗಡ ಒಡಂಬಡಿಕೆಯನ್ನು ಮಾಡು; ಆಗ ಇಗೋ, ಇಸ್ರಾಯೇಲ್ಯರನ್ನೆಲ್ಲಾ ನಿನ್ನ ಬಳಿಗೆ ಬರಮಾಡುವ ಹಾಗೆ ನನ್ನ ಕೈ ನಿನ್ನ ಸಂಗಡ ಇರುವದೆಂದು ಹೇಳಿರಿ ಅಂದನು.

3:13b.2SA.003.013 ಅದಕ್ಕವನು--ಒಳ್ಳೇದು, ನಾನು ನಿನ್ನ ಸಂಗಡ ಒಡಂಬಡಿಕೆಯನ್ನು ಮಾಡುವೆನು; ಆದರೆ ಒಂದನ್ನು ನಾನು ನಿನ್ನನ್ನು ಕೇಳುತ್ತೇನೆ; ಏನಂದರೆ, ನೀನು ನನ್ನ ಮುಖವನ್ನು ನೋಡುವದಕ್ಕೆ ಬರುವಾಗ ಸೌಲನ ಮಗಳಾದ ವಿಾಕಲಳನ್ನು ನೀನು ಕರಕೊಂಡು ಬಾರದೆ ಹೋದರೆ ನೀನು ನನ್ನ ಮುಖವನ್ನು ನೋಡಬಾರದು ಅಂದನು.

3:14b.2SA.003.014 ದಾವೀದನು ಸೌಲನ ಮಗನಾದ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ--ಫಿಲಿಷ್ಟಿ ಯರ ನೂರು ಮುಂದೊಗಲುಗಳಿಂದ ನನಗೆ ನೇಮಕ ಮಾಡಿಕೊಂಡ ನನ್ನ ಹೆಂಡತಿಯಾದ ವಿಾಕಲಳನ್ನು ನನಗೆ ಒಪ್ಪಿಸು ಅಂದನು.

3:15b.2SA.003.015 ಆಗ ಈಷ್ಬೋಶೆತನು ಸೇವಕರನ್ನು ಕಳುಹಿಸಿ--ಲಯಿಷನ ಮಗನಾಗಿರುವ ಅವಳ ಗಂಡನಾದ ಪಲ್ಟೀಯೇಲನಿಂದ ಅವಳನ್ನು ಕರೆ ಯಿಸಿ ತೆಗೆದುಕೊಂಡನು.

3:16b.2SA.003.016 ಅವಳ ಗಂಡನು ಅವಳ ಸಂಗಡ ಬಹುರೀಮಿನ ವರೆಗೂ ಅಳುತ್ತಾ ಅವಳ ಹಿಂದೆ ಹೋದನು. ಆಗ ಅಬ್ನೇರನು ಅವನಿಗೆತಿರುಗಿ ಹೋಗು ಅಂದನು; ಅವನು ತಿರುಗಿ ಹೋದನು.

3:17b.2SA.003.017 ಅಬ್ನೇರನು ಇಸ್ರಾಯೇಲಿನ ಹಿರಿಯರ ಸಂಗಡ ಮಾತನಾಡಿ--ದಾವೀದನು ನಿಮ್ಮ ಮೇಲೆ ಅರಸನಾಗಿ ರುವದಕ್ಕೆ ನೀವು ಕಳೆದ ಕಾಲದಲ್ಲಿ ಹುಡುಕುತ್ತಿದ್ದಿರಿ.

3:18b.2SA.003.018 ಆದರೆ ಈಗ ಅದನ್ನು ಮಾಡಿರಿ; ಯಾಕಂದರೆ--ನಾನು ನನ್ನ ಜನರಾದ ಇಸ್ರಾಯೇಲನ್ನು ಫಿಲಿಷ್ಟಿಯರ ವಶದಿಂದಲೂ ಅವರ ಎಲ್ಲಾ ಶತ್ರುಗಳ ವಶದಿಂದಲೂ ನನ್ನ ದಾಸನಾದ ದಾವೀದನ ಕೈಯಿಂದ ತಪ್ಪಿಸಿ ರಕ್ಷಿಸು ವೆನು ಎಂದು ಕರ್ತನು ದಾವೀದನ ವಿಷಯದಲ್ಲಿ ಹೇಳಿದ್ದಾನೆ ಅಂದನು.

3:19b.2SA.003.019 ಇದಲ್ಲದೆ ಅಬ್ನೇರನು ಬೆನ್ಯಾವಿಾನ್ಯನವರ ಸಂಗಡ ಮಾತನಾಡಿದನು. ಅಬ್ನೇ ರನು ಇಸ್ರಾಯೇಲ್ಯರ ದೃಷ್ಟಿಗೂ ಬೆನ್ಯಾವಿಾನನ ಮನೆಯವರೆಲ್ಲರ ದೃಷ್ಟಿಗೂ ಒಳ್ಳೇದಾಗಿ ತೋರಿದ್ದ ನ್ನೆಲ್ಲಾ ದಾವೀದನಿಗೆ ತಿಳಿಸುವದಕ್ಕೆ ಹೆಬ್ರೋನಿಗೆ ಹೋದನು.

3:20b.2SA.003.020 ಹೀಗೆಯೇ ಅಬ್ನೇರನು ತನ್ನ ಸಂಗಡ ಇಪ್ಪತ್ತು ಜನರನ್ನು ಕರಕೊಂಡು ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಬಂದನು. ದಾವೀದನು ಅಬ್ನೇರ ನಿಗೂ ಅವನ ಸಂಗಡ ಬಂದ ಜನರಿಗೂ ಔತಣ ಮಾಡಿಸಿದನು.

3:21b.2SA.003.021 ಆಗ ಅಬ್ನೇರನು ದಾವೀದನಿಗೆಎಲ್ಲಾ ಇಸ್ರಾಯೇಲ್ಯರು ನಿನ್ನ ಸಂಗಡ ಒಡಂಬಡಿಕೆ ಯನ್ನು ಮಾಡುವ ಹಾಗೆಯೂ ನಿನ್ನ ಪ್ರಾಣವು ಇಚ್ಚಿ ಸಿದ ಹಾಗೆ ಎಲ್ಲರ ಮೇಲೆ ಆಳುವ ಹಾಗೆಯೂ ನಾನು ಎದ್ದು ಹೋಗಿ ಎಲ್ಲಾ ಇಸ್ರಾಯೇಲ್ಯರನ್ನು ಅರಸನಾದ ನನ್ನ ಒಡೆಯನ ಬಳಿಗೆ ಕೂಡಿಸಿಕೊಂಡು ಬರುವೆನು ಅಂದನು. ದಾವೀದನು ಅಬ್ನೇರನಿಗೆ ಅಪ್ಪಣೆ ಕೊಟ್ಟದ್ದರಿಂದ ಅವನು ಸಮಾಧಾನವಾಗಿ ಹೋದನು.

3:22b.2SA.003.022 ಆಗ ಇಗೋ, ದಾವೀದನ ಸೇವಕರೂ ಯೋವಾ ಬನೂ ಒಂದು ಸೈನ್ಯದಿಂದ ಬಹಳ ಕೊಳ್ಳೆಯನ್ನು ತಕ್ಕೊಂಡು ಬಂದರು. ಆದರೆ ಅಬ್ನೇರನು ಹೆಬ್ರೋನಿ ನಲ್ಲಿ ದಾವೀದನ ಸಂಗಡ ಇರಲಿಲ್ಲ; ಅವನು ಇವನನ್ನು ಕಳುಹಿಸಿಬಿಟ್ಟದ್ದರಿಂದ ಇವನು ಸಮಾಧಾನವಾಗಿ ಹೋದನು.

3:23b.2SA.003.023 ಯೋವಾಬನೂ ಅವನ ಸಂಗಡ ಇದ್ದ ಸೈನ್ಯವೂ ಬಂದಾಗ ಅವರು ಯೋವಾಬನಿಗೆ--ನೇರನ ಮಗನಾದ ಅಬ್ನೇರನು ಅರಸನ ಬಳಿಗೆ ಬಂದನು; ಅವನು ಇವನನ್ನು ಕಳುಹಿಸಿಬಿಟ್ಟದ್ದರಿಂದ ಸಮಾಧಾನವಾಗಿ ಹೋಗಿದ್ದಾನೆ ಅಂದರು.

3:24b.2SA.003.024 ಆಗ ಯೋವಾಬನು ಅರಸನ ಬಳಿಗೆ ಬಂದು--ಏನು ಮಾಡಿದಿ? ಇಗೋ, ಅಬ್ನೇರನು ನಿನ್ನ ಬಳಿಗೆ ಬಂದನು; ಅವನು ಹೋಗಿಬಿಡುವ ಹಾಗೆ ನೀನು ಅವನನ್ನು ಕಳುಹಿಸಿಬಿಟ್ಟದ್ದು ಯಾಕೆ?

3:25b.2SA.003.025 ನೇರನ ಮಗನಾದ ಅಬ್ನೇರನನ್ನು ನೀನು ಅರಿತಿದ್ದಿಯಲ್ಲಾ. ನಿಶ್ಚಯವಾಗಿ ಅವನು ನಿನ್ನನ್ನು ಮೋಸಗೊಳಿಸಲು ನಿನ್ನ ಹೊರಡು ವಿಕೆಯನ್ನೂ ಬರುವಿಕೆಯನ್ನೂ ತಿಳಿಯುವಂತೆಯೂ ನೀನು ಮಾಡುವದನ್ನೆಲ್ಲಾ ತಿಳಿಯುವದಕ್ಕೂ ಬಂದಿದ್ದನು ಅಂದನು.

3:26b.2SA.003.026 ಯೋವಾಬನು ದಾವೀದನನ್ನು ಬಿಟ್ಟು ಹೊರಟುಬಂದು ಅವನು ಅಬ್ನೇರನ ಹಿಂದೆ ದೂತರನ್ನು ಕಳುಹಿಸಿದನು; ಅವರು ಅವನನ್ನು ಸಿರಾ ಬಾವಿಯ ಬಳಿಯಿಂದ ತಿರಿಗಿ ಕರಕೊಂಡು ಬಂದರು. ಆದರೆ ದಾವೀದನಿಗೆ ಅದು ತಿಳಿಯದೆ ಇತ್ತು.

3:27b.2SA.003.027 ಅಬ್ನೇರನು ಹೆಬ್ರೋನಿಗೆ ತಿರಿಗಿ ಬಂದ ತರುವಾಯ ಯೋವಾಬನು ಬಾಗಲಲ್ಲಿ ಅವನ ಸಂಗಡ ಸಮಾಧಾನವಾಗಿ ಮಾತ ನಾಡಿ ಅವನನ್ನು ಒಂದು ಕಡೆ ಕರಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನ ರಕ್ತಾಪರಾಧದ ನಿಮಿತ್ತ ಅಲ್ಲಿ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ಇರಿದು ಕೊಂದುಹಾಕಿದನು.

3:28b.2SA.003.028 ದಾವೀದನು ಅದನ್ನು ಕೇಳಿದಾಗ--ನೇರನ ಮಗ ನಾದ ಅಬ್ನೇರನ ರಕ್ತಾಪರಾಧಕ್ಕೆ ನಾನೂ ನನ್ನ ರಾಜ್ಯವೂ ಎಂದೆಂದಿಗೂ ಕರ್ತನ ಮುಂದೆ ನಿರಪರಾ ಧಿಯಾಗಿದ್ದೇವೆ.

3:29b.2SA.003.029 ಅದು ಯೋವಾಬನ ತಲೆಯ ಮೇಲೆಯೂ ಅವನ ತಂದೆಯ ಮನೆತನದವರ ಮೇಲೆಯೂ ಇರಲಿ. ಯೋವಾಬನ ಮನೆಯಲ್ಲಿ ರಕ್ತ ಸ್ರಾವ ರೋಗದವನೂ ಕುಷ್ಠರೋಗಿಯೂ ಕೋಲು ಹಿಡಿದು ನಡೆಯುವವನೂ ಕತ್ತಿಯಿಂದ ಬೀಳುವವನೂ ರೊಟ್ಟಿಯ ಕೊರತೆಯುಳ್ಳ ಯಾವನೂ ತಪ್ಪಿಸಿಕೊಳ್ಳ ಲಾರದೆ ಇರಲಿ ಅಂದನು.

3:30b.2SA.003.030 ಹೀಗೆಯೇ ಅಬ್ನೇರ ನನ್ನು ಕೊಂದುಹಾಕಿದರು; ಅವನು ಅವರ ಸಹೋ ದರನಾದ ಅಸಾಹೇಲನನ್ನು ಗಿಬ್ಯೋನಿನ ಯುದ್ಧದಲ್ಲಿ ಕೊಂದುಹಾಕಿದ್ದನು.

3:31b.2SA.003.031 ಆಗ ದಾವೀದನು ಯೋವಾಬನಿಗೂ ಅವನ ಸಂಗಡವಿದ್ದ ಎಲ್ಲಾ ಜನರಿಗೂ--ನೀವು ನಿಮ್ಮ ವಸ್ತ್ರಗ ಳನ್ನು ಹರಕೊಂಡು ಗೋಣೀತಟ್ಟುಗಳನ್ನು ಉಟ್ಟು ಕೊಂಡು ಅಬ್ನೇರನ ಮುಂದೆ ಗೋಳಾಡಿರಿ ಅಂದನು.ಅರಸನಾದ ದಾವೀದನು ತಾನೇ ಅವನ ಶವದ ಪೆಟ್ಟಿಗೆಯ ಹಿಂದೆ ಹೋದನು.

3:32b.2SA.003.032 ಅವರು ಅಬ್ನೇರನನ್ನು ಹೆಬ್ರೋನಿನಲ್ಲಿ ಹೂಣಿಟ್ಟರು. ಆಗ ಅರಸನು ಗಟ್ಟಿ ಯಾಗಿ ಅಬ್ನೇರನ ಸಮಾಧಿಯ ಬಳಿಯಲ್ಲಿ ಅತ್ತನು; ಜನರೆಲ್ಲರೂ ಅತ್ತರು.

3:33b.2SA.003.033 ಅರಸನು ಅಬ್ನೇರನಿಗೋಸ್ಕರ ಗೋಳಾಡಿ ಹೇಳಿದ್ದೇನಂದರೆ--

3:34b.2SA.003.034 ಬುದ್ಧಿಹೀನನು ಸತ್ತ ಹಾಗೆಯೇ ಅಬ್ನೇರನು ಸತ್ತನೋ? ನಿನ್ನ ಕೈಗಳು ಕಟ್ಟಲ್ಪಡಲಿಲ್ಲ, ಇಲ್ಲವೆ ನಿನ್ನ ಕಾಲುಗಳಿಗೆ ಬೇಡಿ ಹಾಕಲ್ಪಡಲಿಲ್ಲ; ಒಬ್ಬನು ದುಷ್ಟರ ಮುಂದೆ ಬೀಳುವ ಹಾಗೆಯೇ ನೀನು ಬಿದ್ದಿದೀ ಅಂದನು. ಆಗ ಜನರೆಲ್ಲರು ತಿರಿಗಿ ಅವನಿಗೋಸ್ಕರ ಅತ್ತರು.

3:35b.2SA.003.035 ಇನ್ನೂ ಹೊತ್ತಿರು ವಾಗಲೇ ಜನರೆಲ್ಲರು ಬಂದು-- ಊಟಮಾಡು ಎಂದು ದಾವೀದನಿಗೆ ಹೇಳಿದಾಗ ದಾವೀದನು--ಸೂರ್ಯನು ಅಸ್ತಮಿಸುವದಕ್ಕಿಂತ ಮುಂಚೆ ನಾನು ರೊಟ್ಟಿಯನ್ನಾ ದರೂ ಮತ್ತೇನಾದರೂ ರುಚಿ ನೋಡಿದರೆ ದೇವರು ನನಗೆ ಹಾಗೇ ಮಾಡಲಿ, ಅಧಿಕವಾಗಿಯೂ ಮಾಡ ಲೆಂದು ಆಣೆಇಟ್ಟು ಹೇಳಿದನು.

3:36b.2SA.003.036 ಜನರೆಲ್ಲರು ಅದನ್ನು ತಿಳಿದುಕೊಂಡಾಗ ಅವರೆಲ್ಲರಿಗೆ ಮೆಚ್ಚಿಕೆಯಾಯಿತು. ಹಾಗೆಯೇ ಅರಸನು ಏನೇನು ಮಾಡಿದನೋ ಅದು ಜನರಿಗೆ ಮೆಚ್ಚಿಕೆಯಾಗಿತ್ತು.

3:37b.2SA.003.037 ನೇರನ ಮಗನಾದ ಅಬ್ನೇರನನ್ನು ಕೊಂದುಹಾಕಿದ್ದು ಅರಸನಿಂದ ಆದ ದ್ದಲ್ಲವೆಂದು ಎಲ್ಲಾ ಜನರೂ ಸಮಸ್ತ ಇಸ್ರಾಯೇಲ್ಯರೂ ಆ ದಿನದಲ್ಲಿ ತಿಳಿದುಕೊಂಡರು.

3:38b.2SA.003.038 ಇದಲ್ಲದೆ ಅರಸನು ತನ್ನ ಸೇವಕರಿಗೆ--ಇಸ್ರಾಯೇಲಿನಲ್ಲಿ ಈ ಹೊತ್ತು ಪ್ರಧಾನನೂ ದೊಡ್ಡವನೂ ಬಿದ್ದಿದ್ದಾನೆಂದು ಗೊತ್ತಿ ಲ್ಲವೋ?ನಾನು ಅರಸನಾಗಿ ಅಭಿಷೇಕಿಸ ಲ್ಪಟ್ಟಿದ್ದರೂ ಇಂದಿಗೆ ದುರ್ಬಲನಾಗಿದ್ದೇನೆ. ಚೆರೂಯಳ ಕುಮಾರ ರಾದ ಈ ಮನುಷ್ಯರು ನನಗೆ ಕಠಿಣರಾಗಿದ್ದಾರೆ. ಕೆಟ್ಟತನ ಮಾಡುವವನಿಗೆ ಕರ್ತನು ಅವನ ಕೆಟ್ಟತನಕ್ಕೆ ಸರಿಯಾಗಿ ಪ್ರತಿಫಲ ಕೊಡುವನು ಅಂದನು.

3:39b.2SA.003.039 ನಾನು ಅರಸನಾಗಿ ಅಭಿಷೇಕಿಸ ಲ್ಪಟ್ಟಿದ್ದರೂ ಇಂದಿಗೆ ದುರ್ಬಲನಾಗಿದ್ದೇನೆ. ಚೆರೂಯಳ ಕುಮಾರ ರಾದ ಈ ಮನುಷ್ಯರು ನನಗೆ ಕಠಿಣರಾಗಿದ್ದಾರೆ. ಕೆಟ್ಟತನ ಮಾಡುವವನಿಗೆ ಕರ್ತನು ಅವನ ಕೆಟ್ಟತನಕ್ಕೆ ಸರಿಯಾಗಿ ಪ್ರತಿಫಲ ಕೊಡುವನು ಅಂದನು.

4

4:1b.2SA.004.001 ಅಬ್ನೇರನು ಹೆಬ್ರೋನಿನಲ್ಲಿ ಸತ್ತುಹೋದ ನೆಂದು ಸೌಲನ ಮಗನು ಕೇಳಿದಾಗ ಅವನ ಕೈಗಳು ದುರ್ಬಲವಾದವು; ಇಸ್ರಾಯೇಲ್ಯ ರೆಲ್ಲರೂ ಕಳವಳಗೊಂಡರು.

4:2b.2SA.004.002 ಆದರೆ ಸೌಲನ ಮಗ ನಿಗೆ ಪಟಾಲಮಿನ ಅಧಿಪತಿಗಳಾದ ಇಬ್ಬರು ಮನುಷ್ಯ ರಿದ್ದರು; ಒಬ್ಬನ ಹೆಸರು ಬಾಣ ಮತ್ತೊಬ್ಬನ ಹೆಸರು ರೇಕಾಬ್‌; ಅವರು ಬೆನ್ಯಾವಿಾನನ ಮಕ್ಕಳಲ್ಲಿ ಬೇರೋತಿ ನವನಾದ ರಿಮ್ಮೋನನ ಮಕ್ಕಳು.

4:3b.2SA.004.003 ಬೇರೋತ್‌ ಬೆನ್ಯಾವಿಾನನ ಪಾಲಿನಲ್ಲಿ ಲೆಖ್ಖಿಸಲ್ಪಟ್ಟಿತ್ತು. ಆದರೆ ಬೇರೋತ್ಯರು ಗಿತ್ತಾಯಿಮಿಗೆ ಓಡಿಹೋಗಿ ಇಂದಿನ ವರೆಗೂ ಅಲ್ಲಿ ಪ್ರವಾಸಿಗಳಾಗಿದ್ದಾರೆ.

4:4b.2SA.004.004 ಆದರೆ ಸೌಲನ ಮಗನಾದ ಯೋನಾತಾನನಿಗೆ ಕಾಲು ಕುಂಟಾದ ಒಬ್ಬ ಮಗನಿದ್ದನು. ಇಜ್ರೇಲಿನಿಂದ ಸೌಲನೂ ಯೋನಾತಾನನೂ ಸತ್ತರೆಂಬ ವರ್ತಮಾನ ಬಂದಾಗ ಅವನು ಐದು ವರುಷದವನಾಗಿದ್ದನು. ಆಗ ಅವನ ದಾದಿಯು ಅವನನ್ನು ಎತ್ತಿಕೊಂಡು ಓಡಿ ಹೋದಳು. ಅವಳು ತ್ವರೆಯಾಗಿ ಓಡಿದಾಗ ಏನಾಯಿ ತಂದರೆ, ಅವನು ಬಿದ್ದು ಕುಂಟನಾದನು. ಅವನ ಹೆಸರು ಮೆಫೀಬೋಶೆತನು.

4:5b.2SA.004.005 ಬೇರೋತಿನ ಮಗನಾಗಿರುವ ರಿಮ್ಮೋನನ ಮಕ್ಕ ಳಾದ ರೇಕಾಬನೂ ಬಾಣನೂ ಹೊರಟು ಮಧ್ಯಾಹ್ನದ ಬಿಸಿಲಿನಲ್ಲಿ ಮಂಚದ ಮೇಲೆ ಮಲಗಿಕೊಂಡಿರುವ ಈಷ್ಬೋಶೆತನ ಮನೆಗೆ ಬಂದರು.

4:6b.2SA.004.006 ಗೋಧಿಯನ್ನು ತಕ್ಕೊಂಡು ಹೋಗುವವರಾಗಿ ನಡು ಮನೆಯೊಳಗೆ ಬಂದು ಅವನ ಐದನೇ ಎಲುಬಿನ ಸಂದಿನಲ್ಲಿ ತಿವಿದರು. ರೇಕಾಬನೂ ಅವನ ಸಹೋದರನಾದ ಬಾಣನೂ ತಪ್ಪಿಸಿಕೊಂಡು ಹೋದರು.

4:7b.2SA.004.007 ಅವರು ಮನೆಯೊಳಗೆ ಪ್ರವೇಶಿಸಿದಾಗ ಅವನು ಮಲಗುವ ಮನೆಯಲ್ಲಿ ತನ್ನ ಹಾಸಿಗೆಯ ಮೇಲೆ ಮಲಗಿದ್ದನು; ಇವರು ಅವನನ್ನು ಹೊಡೆದು ಕೊಂದುಹಾಕಿ ತಲೆಯನ್ನು ಕಡಿದು ಅದನ್ನು ತೆಗೆದುಕೊಂಡು ರಾತ್ರಿಯೆಲ್ಲಾ ಬೈಲಿನಲ್ಲಿ ನಡೆದು

4:8b.2SA.004.008 ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಈಷ್ಬೋ ಶೆತನ ತಲೆಯನ್ನು ತಂದು ಅರಸನಿಗೆ--ಇಗೋ, ನಿನ್ನ ಪ್ರಾಣವನ್ನು ಹುಡುಕಿದ ನಿನ್ನ ಶತ್ರುವಾಗಿದ್ದ ಸೌಲನ ಮಗನಾದ ಈಷ್ಬೋಶೆತನ ತಲೆಯು. ಈ ದಿನದಲ್ಲಿ ಕರ್ತನು ಅರಸನಾದ ನಮ್ಮ ಒಡೆಯನಿಗೋಸ್ಕರ ಸೌಲ ನಿಗೂ ಅವನ ಸಂತಾನಕ್ಕೂ ಮುಯ್ಯಿತೀರಿಸಿದ್ದಾನೆ ಅಂದರು.

4:9b.2SA.004.009 ಆಗ ದಾವೀದನು ಬೇರೋತಿನ ಮಗನಾ ಗಿರುವ ರಿಮ್ಮೋನನ ಮಕ್ಕಳಾದ ರೇಕಾಬಿಗೂ ಅವನ ಸಹೋದರನಾದ ಬಾಣನಿಗೂ ಪ್ರತ್ಯುತ್ತರವಾಗಿ--ಎಲ್ಲಾ ಇಕ್ಕಟ್ಟಿನಿಂದ ನನ್ನ ಪ್ರಾಣವನ್ನು ವಿಮೋಚಿಸಿದ ಕರ್ತನ ಜೀವದಾಣೆ, ತನ್ನ ಕಣ್ಣಿಗೆ ಸುವರ್ತಮಾನವನ್ನು ತಂದವನು ಎಂದು ಕಾಣಿಸಿಕೊಂಡವನಾಗಿ ನಾನು ತನ್ನ ವರ್ತಮಾನಕ್ಕೋಸ್ಕರ ಬಹುಮಾನವನ್ನು ಕೊಡು ವೆನೆಂದು ನೆನಸಿ

4:10b.2SA.004.010 ಒಬ್ಬನು ನನಗೆ--ಇಗೋ, ಸೌಲನು ಸತ್ತನೆಂದು ಹೇಳಿದ್ದರಿಂದ ನಾನು ಚಿಕ್ಲಗಿನಲ್ಲಿ ಅವನನ್ನು ಹಿಡಿದು ಕೊಂದುಹಾಕಿದೆನು.

4:11b.2SA.004.011 ತನ್ನ ಮನೆಯಲ್ಲಿ ತನ್ನ ಹಾಸಿಗೆಯ ಮೇಲೆ ಮಲಗಿದ್ದ ನೀತಿವಂತನನ್ನು ಕೊಲೆಮಾಡಿದ ದುಷ್ಟ ಮನುಷ್ಯರನ್ನು ಎಷ್ಟೋ ಹೆಚ್ಚಾಗಿ ಕೊಲೆಮಾಡುವೆನು. ಹಾಗಾದರೆ ಈಗ ನಾನು ನಿಮ್ಮ ಕೈಯಿಂದ ಅವನ ರಕ್ತ ವಿಚಾ ರಣೆ ಮಾಡಿ ನಿಮ್ಮನ್ನು ಭೂಮಿಯಿಂದ ತೆಗೆದುಬಿಡದೆ ಇರುವೆನೋ ಅಂದನು.ದಾವೀದನು ತನ್ನ ಯೌವ ನಸ್ಥರಿಗೆ ಆಜ್ಞಾಪಿಸಿದ್ದರಿಂದ ಅವರು ಅವರನ್ನು ಕೊಂದು ಹಾಕಿ, ಅವರ ಕೈಕಾಲುಗಳನ್ನು ಕಡಿದು ಹೆಬ್ರೋ ನಿನಲ್ಲಿರುವ ಕೊಳದ ಬಳಿಯಲ್ಲಿ ತೂಗುಹಾಕಿದರು. ಅವರು ಈಷ್ಬೋಶೆತನ ತಲೆಯನ್ನು ತಕ್ಕೊಂಡು ಅದನ್ನು ಹೆಬ್ರೋನಿನಲ್ಲಿರುವ ಅಬ್ನೇರನ ಸಮಾಧಿಯಲ್ಲಿ ಹೂಣಿಟ್ಟರು.

4:12b.2SA.004.012 ದಾವೀದನು ತನ್ನ ಯೌವ ನಸ್ಥರಿಗೆ ಆಜ್ಞಾಪಿಸಿದ್ದರಿಂದ ಅವರು ಅವರನ್ನು ಕೊಂದು ಹಾಕಿ, ಅವರ ಕೈಕಾಲುಗಳನ್ನು ಕಡಿದು ಹೆಬ್ರೋ ನಿನಲ್ಲಿರುವ ಕೊಳದ ಬಳಿಯಲ್ಲಿ ತೂಗುಹಾಕಿದರು. ಅವರು ಈಷ್ಬೋಶೆತನ ತಲೆಯನ್ನು ತಕ್ಕೊಂಡು ಅದನ್ನು ಹೆಬ್ರೋನಿನಲ್ಲಿರುವ ಅಬ್ನೇರನ ಸಮಾಧಿಯಲ್ಲಿ ಹೂಣಿಟ್ಟರು.

5

5:1b.2SA.005.001 ಇದಾದ ಮೇಲೆ ಇಸ್ರಾಯೇಲ್‌ ಗೋತ್ರ ಗಳೆಲ್ಲಾ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು--ಇಗೋ, ನಾವು ನಿನ್ನ ಎಲುಬೂ ನಿನ್ನ ಮಾಂಸವೂ ಆಗಿದ್ದೇವೆ.

5:2b.2SA.005.002 ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ ನೀನು ಇಸ್ರಾಯೇಲನ್ನು ಹೊರಗೆ ನಡಿಸುವವನಾಗಿಯೂ ಒಳಗೆ ತರುವವನಾಗಿಯೂ ಆಗಿದ್ದಿ. ಆದದರಿಂದ ಕರ್ತನು ನಿನಗೆ--ನೀನು ನನ್ನ ಜನರಾದ ಇಸ್ರಾಯೇ ಲನ್ನು ಮೇಯಿಸುವಿ; ಇಸ್ರಾಯೇಲಿನ ಮೇಲೆ ನಾಯಕನಾಗಿರುವಿ ಎಂದು ಹೇಳಿದನು ಅಂದರು.

5:3b.2SA.005.003 ಹಾಗೆಯೇ ಇಸ್ರಾಯೇಲಿನ ಹಿರಿಯರೆಲ್ಲರೂ ಹೆಬ್ರೋನಿನಲ್ಲಿರುವ ಅರಸನ ಬಳಿಗೆ ಬಂದಾಗ ಅರಸ ನಾದ ದಾವೀದನು ಹೆಬ್ರೋನಿನಲ್ಲಿ ಕರ್ತನ ಮುಂದೆ ಅವರ ಸಂಗಡ ಒಡಂಬಡಿಕೆಯನ್ನು ಮಾಡಿದನು. ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸ ನಾಗಿರಲು ಅಭಿಷೇಕಮಾಡಿದರು.

5:4b.2SA.005.004 ದಾವೀದನು ಆಳಲು ಪ್ರಾರಂಭಿಸಿದಾಗ ಮೂವತ್ತು ವರುಷದವ ನಾಗಿದ್ದನು; ಅವನು ನಾಲ್ವತ್ತು ವರುಷ ಆಳಿದನು.

5:5b.2SA.005.005 ಅವನು ಹೆಬ್ರೋನಿನಲ್ಲಿ ಯೆಹೂದ ಜನರ ಮೇಲೆ ಏಳುವರೆ ವರುಷ ಆಳಿದನು. ಯೆರೂಸಲೇಮಿನಲ್ಲಿ ಎಲ್ಲಾ ಇಸ್ರಾಯೇಲ್ಯರ ಮೇಲೆಯೂ ಎಲ್ಲಾ ಯೆಹೂ ದದ ಜನರ ಮೇಲೆಯೂ ಮೂವತ್ತುಮೂರು ವರುಷ ಆಳಿದನು.

5:6b.2SA.005.006 ಆಗ ಅರಸನೂ ಅವನ ಜನರೂ ದೇಶದ ನಿವಾಸಿ ಗಳಾದ ಯೆಬೂಸಿಯರು ಒಳಗೆ ಯೆರೂಸಲೇಮಿಗೆ ಬಂದರು. ದಾವೀದನು ಇದರಲ್ಲಿ ಬರಲಾರನೆಂದು ಅವರು ನೆನಸಿ ದಾವೀದನಿಗೆ--ನೀನು ಕುರುಡರನ್ನೂ ಕುಂಟರನ್ನೂ ತೆಗೆದುಹಾಕದ ಹೊರತು ನೀನು ಇಲ್ಲಿಗೆ ಬರಲಾರಿ ಅಂದರು.

5:7b.2SA.005.007 ಆದಾಗ್ಯೂ ದಾವೀದನು ಚೀಯೋನಿನ ಕೋಟೆಯನ್ನು ಹಿಡುಕೊಂಡನು. ಅದೇ ದಾವೀದನ ಪಟ್ಟಣವು.

5:8b.2SA.005.008 ಆ ದಿವಸದಲ್ಲಿ ದಾವೀದನುಕಂದಕವನ್ನು ದಾಟಿ ಯೆಬೂಸಿಯರನ್ನು ಅಂದರೆ ದಾವೀದನ ಪ್ರಾಣ ದ್ವೇಷಿಗಳಾದ ಕುಂಟರನ್ನೂ ಕುರು ಡರನ್ನೂ ಹೊಡೆಯುವವನು (ಮುಖ್ಯಸ್ಥನೂ ಅಧಿ ಪತಿಯೂ ಆಗಿರುವನು) ಎಂದು ಹೇಳಿದ್ದನು. ಅದಕ್ಕೆ ಅವರು--ಕುರುಡರೂ ಕುಂಟರೂ ಮನೆಯೊಳಗೆ ಬರಕೂಡದು ಅಂದರು.

5:9b.2SA.005.009 ದಾವೀದನು ಕೋಟೆಯಲ್ಲಿ ವಾಸಮಾಡಿ ಅದಕ್ಕೆ ದಾವೀದನ ಪಟ್ಟಣವೆಂದು ಹೆಸರಿಟ್ಟನು. ಇದಲ್ಲದೆ ದಾವೀದನು ಮಿಲ್ಲೋವಿನ ಸುತ್ತಲಾಗಿ ಪ್ರಾರಂಭಿಸಿ ಒಳಪಾರ್ಶ್ವದಲ್ಲಿ ಇರುವದನ್ನು ಕಟ್ಟಿಸಿದನು.

5:10b.2SA.005.010 ಹೀಗೆ ಯೇ ದಾವೀದನು ದಿನದಿನಕ್ಕೆ ದೊಡ್ಡವನಾಗುತ್ತಾ ಇದ್ದನು; ಸೈನ್ಯಗಳ ದೇವರಾದ ಕರ್ತನು ಅವನ ಸಂಗಡ ಇದ್ದನು.

5:11b.2SA.005.011 ಆಗ ತೂರಿನ ಅರಸನಾದ ಹೀರಾ ಮನು ದಾವೀದನ ಬಳಿಗೆ ದೂತರನ್ನೂ ದೇವದಾರು ಮರಗಳನ್ನೂ ಬಡಿಗೆಯವರನ್ನೂ ಶಿಲ್ಪಿಗಳನ್ನೂ ಕಳು ಹಿಸಿದನು. ಅವರು ದಾವೀದನಿಗೆ ಮನೆಯನ್ನು ಕಟ್ಟಿ ದರು.

5:12b.2SA.005.012 ದಾವೀದನು ತನ್ನನ್ನು ಕರ್ತನು ಇಸ್ರಾಯೇ ಲಿನ ಮೇಲೆ ಅರಸನನ್ನಾಗಿ ಸ್ಥಿರಪಡಿಸಿದನೆಂದೂ ತನ್ನ ಜನವಾದ ಇಸ್ರಾಯೇಲಿನ ನಿಮಿತ್ತ ತನ್ನ ರಾಜ್ಯವನ್ನು ಉನ್ನತಕ್ಕೇರಿಸಿದನೆಂದೂ ತಿಳಿದುಕೊಂಡನು.

5:13b.2SA.005.013 ದಾವೀದನು ಹೆಬ್ರೋನನ್ನು ಬಿಟ್ಟುಹೋದ ತರುವಾಯ ಯೆರೂಸಲೇಮಿನಿಂದ ಇನ್ನೂ ಕೆಲವು ಮಂದಿ ಉಪಪತ್ನಿಯರನ್ನೂ ಹೆಂಡತಿಯರನ್ನೂ ಮಾಡಿಕೊಂಡನು; ದಾವೀದನಿಗೆ ಇನ್ನೂ ಕುಮಾ ರರೂ ಕುಮಾರ್ತೆಯರೂ ಹುಟ್ಟಿದರು.

5:14b.2SA.005.014 ಯೆರೂಸ ಲೇಮಿನಲ್ಲಿ ಅವನಿಗೆ ಹುಟ್ಟಿದವರ ಹೆಸರುಗಳು ಯಾವವೆಂದರೆ; ಶಮ್ಮೂವ ಶೊಬಾಬ್‌ ನಾತಾನ್‌

5:15b.2SA.005.015 ಸೊಲೊಮೋನ್‌ ಇಬ್ಹಾರ್‌

5:16b.2SA.005.016 ಎಲೀಷೂವ ನೆಫೆಗ್‌ ಯಾಫೀಯ ಎಲೀಷಾಮ ಎಲ್ಯಾದ ಎಲೀಫೆ ಲೆಟ್‌ ಇವರೇ.

5:17b.2SA.005.017 ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಲು ಅಭಿಷೇಕಮಾಡಿದ್ದಾರೆಂದು ಫಿಲಿಷ್ಟಿ ಯರು ಕೇಳಿದಾಗ ಅವರೆಲ್ಲರು ದಾವೀದನನ್ನು ಹುಡುಕು ವದಕ್ಕೆ ಬಂದರು. ಅದನ್ನು ದಾವೀದನು ಕೇಳಿ ಗಡಿ ಸ್ಥಳಕ್ಕೆ ಹೋದನು.

5:18b.2SA.005.018 ಆದರೆ ಫಿಲಿಷ್ಟಿಯರು ಬಂದು ರೆಫಾಯಾಮ್‌ ತಗ್ಗಿನಲ್ಲಿ ಇಳುಕೊಂಡರು.

5:19b.2SA.005.019 ಆಗ ದಾವೀದನು--ನಾನು ಫಿಲಿಷ್ಟಿಯರ ಮೇಲೆ ಹೋಗ ಬೇಕೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡು ವಿಯೋ ಎಂದು ಕರ್ತನನ್ನು ಕೇಳಿದನು. ಅದಕ್ಕೆ ಕರ್ತನು ದಾವೀದನಿಗೆ--ಹೋಗು; ಫಿಲಿಷ್ಟಿಯರನ್ನು ನಿನ್ನ ಕೈ ಯಲ್ಲಿ ಖಂಡಿತಾ ಕೊಡುವೆನು ಎಂದು ಹೇಳಿದನು.

5:20b.2SA.005.020 ಆದಕಾರಣ ದಾವೀದನು ಬಾಳ್‌ಪೆರಾಚೀಮಿಗೆ ಬಂದು ಅಲ್ಲಿ ಅವರನ್ನು ಹೊಡೆದು--ನೀರು ಕಟ್ಟೆ ಒಡೆದು ಹರಿಯುವ ಹಾಗೆ ಕರ್ತನು ನನ್ನ ಮುಂದೆ ನನ್ನ ಶತ್ರುಗಳ ಮೇಲೆ ಹರಿದು ಬಿದ್ದಿದ್ದಾನೆ ಎಂದು ಹೇಳಿ ಆ ಸ್ಥಳಕ್ಕೆ ಬಾಳ್‌ಪೆರಾಚೀಮ್‌ ಎಂದು ಹೆಸರಿ ಟ್ಟನು.

5:21b.2SA.005.021 ಅಲ್ಲಿ ಫಿಲಿಷ್ಟಿಯರು ತಮ್ಮ ವಿಗ್ರಹಗಳನ್ನು ಬಿಟ್ಟುಹೋದದರಿಂದ ದಾವೀದನೂ ಅವನ ಜನರೂ ಅವುಗಳನ್ನು ಸುಟ್ಟುಬಿಟ್ಟರು.

5:22b.2SA.005.022 ಫಿಲಿಷ್ಟಿಯರು ತಿರಿಗಿ ಬಂದು ರೆಫಾಯಾಮ್‌ ತಗ್ಗಿನಲ್ಲಿ ವಿಸ್ತಾರವಾಗಿ ಹರಡಿಕೊಂಡರು.

5:23b.2SA.005.023 ದಾವೀ ದನು ಕರ್ತನನ್ನು ಕೇಳಿಕೊಂಡಾಗ ಆತನು ಅವನಿಗೆನೀನು ಹೋಗದೆ ಅವರ ಹಿಂದುಗಡೆ ಸುತ್ತಿಕೊಂಡು ಹೋಗಿ ಹಿಪ್ಪಲಿ ಗಿಡಗಳಿಗೆದುರಾಗಿ ಅವರ ಮೇಲೆ ಬರಬೇಕು.

5:24b.2SA.005.024 ಹಿಪ್ಪಲಿ ಗಿಡಗಳ ಶಿಖರಗಳಲ್ಲಿ ನಡೆದು ಬರುವ ಶಬ್ದವನ್ನು ನೀನು ಕೇಳಿದಾಗ ಚೇತರಿಸಿಕೊಳ್ಳ ಬೇಕು. ಯಾಕಂದರೆ ಆಗಲೇ ಕರ್ತನು ಫಿಲಿಷ್ಟಿಯರ ದಂಡನ್ನು ಹೊಡೆಯಲು ನಿನ್ನ ಮುಂದಾಗಿ ಹೊರಡು ವನು ಅಂದನು.ಆಗ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರಮಾಡಿ ದಾವೀದನು, ಗೆಬದಿಂದ ಗೆಜೆರಿನ ವರೆಗೆ ಫಿಲಿಷ್ಟಿಯರನ್ನು ಕೊಂದನು.

5:25b.2SA.005.025 ಆಗ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರಮಾಡಿ ದಾವೀದನು, ಗೆಬದಿಂದ ಗೆಜೆರಿನ ವರೆಗೆ ಫಿಲಿಷ್ಟಿಯರನ್ನು ಕೊಂದನು.

6

6:1b.2SA.006.001 ದಾವೀದನು ಇಸ್ರಾಯೇಲಿನಲ್ಲಿ ಆಯಲ್ಪಟ್ಟ ಮೂವತ್ತು ಸಾವಿರ ಜನರನ್ನು ಕೂಡಿಸಿ ಕೊಂಡು ಎದ್ದು ತನ್ನ ಸಂಗಡ ಇದ್ದ ಎಲ್ಲಾ ಜನರನ್ನು ಕರಕೊಂಡು

6:2b.2SA.006.002 ಕೆರೂಬಿಗಳ ಮಧ್ಯದಲ್ಲಿ ವಾಸವಾಗಿ ರುವ ಸೈನ್ಯಗಳ ಕರ್ತನೆಂಬ ಹೆಸರುಳ್ಳ ದೇವರ ಮಂಜೂ ಷವನ್ನು ಯೆಹೂದದ ಬಾಳಾದಿಂದ ತರುವದಕ್ಕೆ ಹೊರಟನು.

6:3b.2SA.006.003 ಆಗ ಅವರು ಗಿಬ್ಯದಲ್ಲಿರುವ ಅಬೀನಾ ದಾಬನ ಮನೆಯೊಳಗಿಂದ ದೇವರ ಮಂಜೂಷವನ್ನು ತೆಗೆದುಕೊಂಡು ಹೊಸ ಬಂಡಿಯ ಮೇಲೆ ಏರಿಸಿದರು.

6:4b.2SA.006.004 ಅಬೀನಾದಾಬನ ಮಕ್ಕಳಾದ ಉಜ್ಜನೂ ಅಹಿಯೋವನೂ ಆ ಹೊಸ ಬಂಡಿಯನ್ನು ನಡಿಸಿದರು. ಗಿಬ್ಯ ದಲ್ಲಿದ್ದ ಅಬೀನಾದಾಬನ ಮನೆಯೊಳಗಿಂದ ಅದನ್ನು ಹೊರಗೆ ತಂದು ಅವರು ಅದರ ಸಂಗಡ ಹೋಗು ತ್ತಿರುವಾಗ ಅಹಿಯೋವನು ಮಂಜೂಷದ ಮುಂದೆ ನಡೆದನು.

6:5b.2SA.006.005 ದಾವೀದನೂ ಇಸ್ರಾಯೇಲ್‌ ಮನೆ ಯವರೆಲ್ಲರೂ ತುರಾಯಿ ಮರದಿಂದ ಮಾಡಲ್ಪಟ್ಟ ಸಕಲ ವಾದ್ಯಗಳಾದ ಕಿನ್ನರಿಗಳನ್ನೂ ವೀಣೆಗಳನ್ನೂ ದಮ್ಮಡಿಗಳನ್ನೂ ಸ್ವರಮಂಡಲಗಳನ್ನೂ ತಾಳಗಳನ್ನೂ ಕರ್ತನ ಮುಂದೆ ಬಾರಿಸಿಕೊಂಡು ಹೋದರು.

6:6b.2SA.006.006 ಅವರು ನಾಕೋನನ ಕಣದ ಬಳಿಗೆ ಬಂದಾಗ ಉಜ್ಜನು ದೇವರ ಮಂಜೂಷವನ್ನು ಹಿಡಿಯುವದಕ್ಕೆ ತನ್ನ ಕೈಚಾಚಿ ಅದನ್ನು ಹಿಡಿದನು. ಯಾಕಂದರೆ ಎತ್ತುಗಳು ಎಡವಿದವು.

6:7b.2SA.006.007 ಆಗ ಕರ್ತನ ಕೋಪವು ಉಜ್ಜನ ಮೇಲೆ ಉರಿಯಿತು; ದೇವರು ಅವನ ಅಪ ರಾಧಕ್ಕೋಸ್ಕರ ಅವನನ್ನು ಹೊಡೆದನು; ಅಲ್ಲಿ ಅವನು ದೇವರ ಮಂಜೂಷದ ಬಳಿಯಲ್ಲಿ ಸತ್ತನು.

6:8b.2SA.006.008 ಕರ್ತನು ಉಜ್ಜನನ್ನು ಹರಿದುಬಿಟ್ಟಿದ್ದರಿಂದ ದಾವೀದನು ವ್ಯಥೆ ಗೊಂಡು ಆ ಸ್ಥಳಕ್ಕೆ ಇಂದಿನ ವರೆಗೂ ಪೆರೆಚುಜ್ಜಾ ಎಂದು ಹೆಸರಿಟ್ಟನು.

6:9b.2SA.006.009 ದಾವೀದನು ಆ ದಿನ ಕರ್ತನಿಗೆ ಭಯಪಟ್ಟು--ಕರ್ತನ ಮಂಜೂಷವು ನನ್ನ ಬಳಿಗೆ ಬರುವದು ಹೇಗೆ ಅಂದನು.

6:10b.2SA.006.010 ದಾವೀದನು ಕರ್ತನ ಮಂಜೂಷವನ್ನು ತಾನು ದಾವೀದನ ಪಟ್ಟಣಕ್ಕೆ ತರಲು ಮನಸ್ಸಿಲ್ಲದೆ ಗತ್‌ ಊರಿನ ಒಬೇದೆದೋಮನ ಮನೆಗೆ ಹೊತ್ತುಕೊಂಡು ಹೋದನು.

6:11b.2SA.006.011 ಕರ್ತನ ಮಂಜೂ ಷವು ಗತ್‌ ಊರಿನ ಒಬೇದೆದೋಮನ ಮನೆಯಲ್ಲಿ ಮೂರು ತಿಂಗಳು ಇದ್ದದ್ದರಿಂದ ಕರ್ತನು ಒಬೇದೆ ದೋಮನನ್ನೂ ಅವನ ಮನೆಯವರೆಲ್ಲರನ್ನೂ ಆಶೀರ್ವದಿಸಿದನು.

6:12b.2SA.006.012 ದೇವರ ಮಂಜೂಷದ ನಿಮಿತ್ತ ಕರ್ತನು ಒಬೇ ದೆದೋಮನ ಮನೆಯನ್ನೂ ಅವನಿಗೆ ಉಂಟಾದ ದ್ದೆಲ್ಲವನ್ನೂ ಆಶೀರ್ವದಿಸಿದ್ದಾನೆಂದು ಅರಸನಾದ ದಾವೀದನಿಗೆ ತಿಳಿಸಲ್ಪಟ್ಟಿತು. ಆಗ ದಾವೀದನು ಹೊರಟು ಹೋಗಿ ದೇವರ ಮಂಜೂಷವನ್ನು ಒಬೇ ದೆದೋಮನ ಮನೆಯಿಂದ ದಾವೀದನ ಪಟ್ಟಣಕ್ಕೆ ಸಂತೋಷವಾಗಿ ತಂದನು.

6:13b.2SA.006.013 ಕರ್ತನ ಮಂಜೂಷ ವನ್ನು ಹೊತ್ತುಕೊಂಡು ಹೋಗುವವರು ಆರು ಹೆಜ್ಜೆ ನಡೆದಾಗ ಅವನು ಎತ್ತುಗಳನ್ನೂ ಕೊಬ್ಬಿದ ಪಶು ಗಳನ್ನೂ ಬಲಿಯಾಗಿ ಕೊಟ್ಟನು.

6:14b.2SA.006.014 ಇದಲ್ಲದೆ ದಾವೀ ದನು ನಾರಿನ ಎಫೋದನ್ನು ಧರಿಸಿಕೊಂಡು ತನ್ನ ಪೂರ್ಣ ಬಲದಿಂದ ಕರ್ತನ ಮುಂದೆ ನಾಟ್ಯವಾ ಡಿದನು.

6:15b.2SA.006.015 ಈ ಪ್ರಕಾರ ದಾವೀದನೂ ಇಸ್ರಾಯೇಲ್‌ ಮನೆಯವರೆಲ್ಲರೂ ಕರ್ತನ ಮಂಜೂಷವನ್ನು ಆರ್ಭಟ ದಿಂದಲೂ ತುತೂರಿಯ ಶಬ್ದದಿಂದಲೂ ಬರಮಾಡಿ ದರು.

6:16b.2SA.006.016 ಆದರೆ ಕರ್ತನ ಮಂಜೂಷವು ದಾವೀದನ ಪಟ್ಟಣದಲ್ಲಿ ಪ್ರವೇಶಿಸುವಾಗ ಸೌಲನ ಮಗಳಾದ ವಿಾಕಲಳು ಕಿಟಿಕಿಯಿಂದ ನೋಡಿ ಅರಸನಾದ ದಾವೀ ದನು ಕರ್ತನ ಮುಂದೆ ಜಿಗಿಯುತ್ತಾ ನಾಟ್ಯವಾಡು ವದನ್ನು ಕಂಡು ತನ್ನ ಹೃದಯದಲ್ಲಿ ಅವನನ್ನು ತಿರಸ್ಕ ರಿಸಿದಳು.

6:17b.2SA.006.017 ಅವರು ಕರ್ತನ ಮಂಜೂಷವನ್ನು ಒಳಗೆ ತಂದು ದಾವೀದನು ಹಾಕಿಸಿದ ಗುಡಾರದೊಳಗೆ ಅದರ ಸ್ಥಳದಲ್ಲಿ ಅದನ್ನು ಇಟ್ಟ ತರುವಾಯ ದಾವೀದನು ಕರ್ತನ ಸನ್ನಿಧಿಯಲ್ಲಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು.

6:18b.2SA.006.018 ದಾವೀದನು ದಹನಬಲಿಗಳನ್ನೂ ಸಮಾಧಾನದಬಲಿಗಳನ್ನೂ ಅರ್ಪಿಸಿ ತೀರಿಸಿದ ತರುವಾಯ ಸೈನ್ಯಗಳ ಕರ್ತನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ ಜನರಿಗೆಲ್ಲಾ ಅಂದರೆ ಇಸ್ರಾಯೇಲಿನ ಸಮೂಹಕ್ಕೆಲ್ಲಾ

6:19b.2SA.006.019 ಸ್ತ್ರೀ ಪುರುಷರಲ್ಲಿ ಒಬ್ಬೊಬ್ಬರಿಗೆ ಒಂದು ರೊಟ್ಟಿ ತುಂಡನ್ನೂ ಒಂದು ದೊಡ್ಡ ತುಂಡು ಮಾಂಸವನ್ನೂ ಒಂದು ಸೀಸೆ ದ್ರಾಕ್ಷಾರಸವನ್ನೂ ಕೊಟ್ಟನು. ತರುವಾಯ ಜನರೆ ಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು.

6:20b.2SA.006.020 ಆಗ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವದಕ್ಕೆ ಹೋದಾಗ ಸೌಲನ ಮಗಳಾದ ವಿಾಕಲಳು ದಾವೀದನಿಗೆ ಎದುರಾಗಿ ಬಂದು--ನಿಷ್ಪ್ರ ಯೋಜಕ ಮನುಷ್ಯರಲ್ಲಿ ಒಬ್ಬನು ನಾಚಿಕೆ ಇಲ್ಲದೆ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿದ ಹಾಗೆಯೇ ಈಹೊತ್ತು ತನ್ನ ಸೇವಕರ ದಾಸಿಗಳ ಕಣ್ಣುಮುಂದೆ ತನ್ನ ವಸ್ತ್ರ ಗಳನ್ನು ಬಿಚ್ಚಿಹಾಕಿದ್ದ ಇಸ್ರಾಯೇಲಿನ ಅರಸನು ಈ ಹೊತ್ತು ಎಷ್ಟು ಘನಪಟ್ಟನು ಅಂದಳು.

6:21b.2SA.006.021 ಆದರೆ ದಾವೀದನು ವಿಾಕಳಿಗೆ--ನಿನ್ನ ತಂದೆಗಿಂತಲೂ ಅವನ ಮನೆಯವರೆಲ್ಲರಿಗಿಂತಲೂ ನನ್ನನ್ನು ಕರ್ತನು ತನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿ ನೇಮಿಸುವೆನು ಎಂದು ಆದುಕೊಂಡ ಕರ್ತನ ಸಮ್ಮು ಖದ ಮುಂದೆಯೇ ಆಯಿತು.

6:22b.2SA.006.022 ನಾನು ಕರ್ತನ ಮುಂದೆ ಆಡುವೆನು. ಇನ್ನೂ ಇದಕ್ಕಿಂತ ಅಲ್ಪನಾಗಿ ಇರುವೆನು; ನಿನ್ನ ದೃಷ್ಟಿಯಲ್ಲಿ ನೀಚನಾಗಿರುವೆನು.ಆದರೆ ನೀನು ಹೇಳಿದ ದಾಸಿಗಳಿಂದ ನಿಶ್ಚಯವಾಗಿ ಘನವನ್ನು ಹೊಂದುವೆನು ಅಂದನು.ಆದದರಿಂದ ಸೌಲನ ಮಗಳಾದ ವಿಾಕಲಳು ತನ್ನ ಮರಣದ ದಿವಸದ ವರೆಗೂ ಮಕ್ಕಳಿಲ್ಲದವಳಾಗಿದ್ದಳು.

6:23b.2SA.006.023 ಆದದರಿಂದ ಸೌಲನ ಮಗಳಾದ ವಿಾಕಲಳು ತನ್ನ ಮರಣದ ದಿವಸದ ವರೆಗೂ ಮಕ್ಕಳಿಲ್ಲದವಳಾಗಿದ್ದಳು.

7

7:1b.2SA.007.001 ಕರ್ತನು ಅರಸನಿಗೆ ಅವನ ಸುತ್ತಲಿದ್ದ ಎಲ್ಲಾ ಶತ್ರುಗಳಿಂದ ತಪ್ಪಿಸಿ ವಿಶ್ರಾಂತಿ ಯನ್ನು ಕೊಟ್ಟ ತರುವಾಯ ಅರಸನು ತನ್ನ ಮನೆ ಯಲ್ಲಿ ಕುಳಿತುಕೊಂಡಿದ್ದಾಗ ಏನಾಯಿತಂದರೆ,

7:2b.2SA.007.002 ಅರ ಸನು ಪ್ರವಾದಿಯಾದ ನಾತಾನನಿಗೆ--ನೋಡು, ನಾನು ದೇವದಾರುಗಳ ಮನೆಯಲ್ಲಿ ವಾಸವಾಗಿದ್ದೇನೆ; ಆದರೆ ದೇವರ ಮಂಜೂಷವು ತೆರೆಗಳ ಮಧ್ಯದಲ್ಲಿ ವಾಸವಾಗಿದೆ ಅಂದನು.

7:3b.2SA.007.003 ಆಗ ನಾತಾನನು ಅರಸ ನಿಗೆ--ನೀನು ಹೋಗಿ ನಿನ್ನ ಹೃದಯದಲ್ಲಿರುವದನ್ನೆಲ್ಲಾ ಮಾಡು; ಕರ್ತನು ನಿನ್ನ ಸಂಗಡ ಇದ್ದಾನೆ ಅಂದನು.

7:4b.2SA.007.004 ಆ ರಾತ್ರಿಯಲ್ಲಿ ಏನಾಯಿತಂದರೆ, ಕರ್ತನ ವಾಕ್ಯವು ನಾತಾನನಿಗೆ ಉಂಟಾಗಿ--

7:5b.2SA.007.005 ನೀನು ಹೋಗಿ ನನ್ನ ಸೇವಕನಾದ ದಾವೀದನಿಗೆ--ಕರ್ತನು ಹೇಳಬೇಕಾದ ದ್ದೇನಂದರೆ--ನಾನು ವಾಸವಾಗಿರುವದಕ್ಕೆ ನೀನು ನನಗೆ ಮನೆಯನ್ನು ಕಟ್ಟುವಿಯೋ?

7:6b.2SA.007.006 ನಿಶ್ಚಯವಾಗಿ ನಾನು ಐಗುಪ್ತದಿಂದ ಇಸ್ರಾಯೇಲ್‌ ಮಕ್ಕಳನ್ನು ಬರಮಾಡಿದ ಕಾಲ ಮೊದಲುಗೊಂಡು ಇಂದಿನ ವರೆಗೂ ಮನೆ ಯಲ್ಲಿ ವಾಸಮಾಡದೆ ಡೇರೆಯಲ್ಲಿಯೂ ಗುಡಾರ ದಲ್ಲಿಯೂ ವಾಸಮಾಡಿಕೊಂಡಿದ್ದೆನು.

7:7b.2SA.007.007 ನಾನು ಇಸ್ರಾಯೆಲ್ಯರಾದ ನನ್ನ ಜನರನ್ನು ಪೋಷಿಸುವಂತೆ ಆಜ್ಞಾಪಿಸಿದ ಇಸ್ರಾಯೇಲಿನ ಒಂದು ಗೋತ್ರದವ ರಿಗೂ--ನೀವು ನನಗೆ ದೇವದಾರಿನ ಮನೆಯನ್ನು ಕಟ್ಟದೆ ಇರುವದೇನೆಂದು ನಾನು ಇಸ್ರಾಯೇಲ್‌ ಮಕ್ಕಳೆಲ್ಲರ ಸಂಗಡ ನಡೆಯುತ್ತಿದ್ದ ಯಾವ ಸ್ಥಳದ ಲ್ಲಾದರೂ ಏನಾದರೂ ಹೇಳಿದೆನೋ?

7:8b.2SA.007.008 ಈಗ ನೀನು ನನ್ನ ಸೇವಕನಾದ ದಾವೀದನಿಗೆ--ನೀನು ನನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ನಾಯಕನಾಗಿರುವಂತೆ ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡೆನು;

7:9b.2SA.007.009 ನೀನು ಎಲ್ಲಿ ಹೋದರೂ ಅಲ್ಲಿ ನಿನ್ನ ಕೂಡ ಇದ್ದು ನಿನ್ನ ಶತ್ರುಗಳೆಲ್ಲರನ್ನು ನಿನ್ನ ಮುಂದೆ ಕಡಿದುಬಿಟ್ಟು ಭೂಮಿಯಲ್ಲಿರುವ ದೊಡ್ಡವರ ಹೆಸರಿನ ಹಾಗೆ ದೊಡ್ಡ ಹೆಸರನ್ನು ನಿನಗೆ ಉಂಟುಮಾಡಿದೆನು.

7:10b.2SA.007.010 ಇದಲ್ಲದೆ ನಾನು ನನ್ನ ಜನರಾದ ಇಸ್ರಾಯೇಲ್ಯರಿಗೆ ಒಂದು ಸ್ಥಳವನ್ನು ಏರ್ಪಡಿಸಿ ಅವರು ಇನ್ನು ಮೇಲೆ ಚಲಿಸದೆ ಸ್ವಸ್ಥಳದಲ್ಲಿ ವಾಸವಾಗಿರುವ ಹಾಗೆ ಅವರನ್ನು ನೆಡು ವೆನು. ಪೂರ್ವದ ಹಾಗೆಯೂ ನಾನು ನನ್ನ ಜನವಾದ ಇಸ್ರಾಯೇಲಿನ ಮೇಲೆ ನ್ಯಾಯಾಧಿಪತಿಗಳನ್ನು ನೇಮಿ ಸಿದ ದಿವಸದಿಂದಾದ ಹಾಗೆಯೂ ದುಷ್ಟತನದ ಮಕ್ಕಳು ಇನ್ನು ಮೇಲೆ ಅವರನ್ನು ಕುಂದಿಸದೆ ಇರುವರು.

7:11b.2SA.007.011 ನಿನ್ನನ್ನು ನಿನ್ನ ಎಲ್ಲಾ ಶತ್ರುಗಳಿಗೆ ತಪ್ಪಿಸಿ ನಿನಗೆ ವಿಶ್ರಾಂತಿಯನ್ನು ಉಂಟುಮಾಡಿದೆನು.

7:12b.2SA.007.012 ಇದಲ್ಲದೆ ಕರ್ತನು ನಿನಗೆ ತಿಳಿಸುವದೇನಂದರೆ, ನಾನು ನಿನಗೆ ಮನೆಯನ್ನು ಕಟ್ಟುವೆನು. ನಿನ್ನ ದಿವಸಗಳು ಪೂರ್ತಿ ಯಾಗಿ ನೀನು ನಿನ್ನ ಪಿತೃಗಳ ಸಂಗಡ ಮಲಗಿಕೊಂಡಿ ರುವಾಗ ನಿನ್ನ ಕರುಳುಗಳಿಂದ ಹೊರಡುವ ನಿನ್ನ ಸಂತತಿಯನ್ನು ನಿನ್ನ ತರುವಾಯ ಎಬ್ಬಿಸಿ ನಾನು ಅವನ ರಾಜ್ಯವನ್ನು ಸ್ಥಿರಮಾಡುವೆನು.

7:13b.2SA.007.013 ಅವನು ನನ್ನ ಹೆಸ ರಿಗೆ ಮನೆಯನ್ನು ಕಟ್ಟುವನು; ನಾನು ಅವನ ರಾಜ್ಯದ ಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು. ನಾನು ಅವನ ತಂದೆಯಾಗಿರುವೆನು; ಅವನು ನನ್ನ ಮಗನಾಗಿರುವನು.

7:14b.2SA.007.014 ಅವನು ಕೆಟ್ಟತನ ಮಾಡಿದರೆ ನಾನು ಅವನನ್ನು ಮನುಷ್ಯರ ಕೋಲಿನಿಂದಲೂ ಮನುಷ್ಯರ ಮಕ್ಕಳ ಪೆಟ್ಟುಗಳಿಂದಲೂ ದಂಡಿಸುವೆನು.

7:15b.2SA.007.015 ಆದರೆ ನಾನು ನಿನ್ನ ಮುಂದೆ ತೊರೆದುಬಿಟ್ಟ ಸೌಲ ನಿಂದ ನನ್ನ ಕೃಪೆಯನ್ನು ನಾನು ತೊಲಗಿಸಿದ ಹಾಗೆ ಅವನಿಂದ ತೊಲಗಿಸುವದಿಲ್ಲ.

7:16b.2SA.007.016 ನಿನ್ನ ಮನೆಯೂ ನಿನ್ನ ರಾಜ್ಯವೂ ನಿನ್ನ ಮುಂದೆ ಸದಾಕಾಲಕ್ಕೂ ಸ್ಥಿರಮಾಡಲ್ಪಡುವವು; ನಿನ್ನ ಸಿಂಹಾಸನವು ಯುಗ ಯುಗಾಂತರಕ್ಕೂ ಶಾಶ್ವತವಾಗಿರುವದು ಎಂದು ಹೇಳಿ ದನು.

7:17b.2SA.007.017 ನಾತಾನನು ಈ ಸಕಲ ವಾಕ್ಯಗಳ ಪ್ರಕಾರ ವಾಗಿಯೂ ಸಕಲ ದರ್ಶನದ ಪ್ರಕಾರವಾಗಿಯೂ ದಾವೀದನ ಸಂಗಡ ಮಾತನಾಡಿದನು.

7:18b.2SA.007.018 ಆಗ ಅರಸ ನಾದ ದಾವೀದನು ಒಳಗೆ ಪ್ರವೇಶಿಸಿ ಕರ್ತನ ಸನ್ನಿಧಿ ಯಲ್ಲಿ ಕೂತುಕೊಂಡು--ಓ ಕರ್ತನಾದ ದೇವರೇ, ನನ್ನನ್ನು ನೀನು ಇಷ್ಟರ ಮಟ್ಟಿಗೆ ತಂದದ್ದಕ್ಕೆ ನಾನು ಎಷ್ಟರವನು? ನನ್ನ ಮನೆ ಎಷ್ಟರದು?

7:19b.2SA.007.019 ಓ ಕರ್ತ ನಾದ ದೇವರೇ, ಇದು ನಿನ್ನ ದೃಷ್ಟಿಯಲ್ಲಿ ಅಲ್ಪವೆಂದು ಕಾಣಿಸಿದಾಗ್ಯೂ ಮುಂದೆ ಬರುವ ಬಹು ಕಾಲದ ವರೆಗೆ ನಿನ್ನ ದಾಸನ ಮನೆಯನ್ನು ಕುರಿತು ಹೇಳಿದಿ. ಓ ಕರ್ತನಾದ ದೇವರೇ, ಇದು ಮನುಷ್ಯನ ಕ್ರಮವೋ?

7:20b.2SA.007.020 ದಾವೀದನು ಇನ್ನು ನಿನಗೆ ಹೆಚ್ಚಾಗಿ ಹೇಳಿಕೊಳ್ಳುವದೇನಿದೆ?

7:21b.2SA.007.021 ನೀನು ನಿನ್ನ ದಾಸನನ್ನು ಬಲ್ಲೆ; ಕರ್ತನಾದ ದೇವರೇ, ನಿನ್ನ ವಾಕ್ಯದ ನಿಮಿತ್ತ ವಾಗಿಯೂ ನಿನ್ನ ಹೃದಯದ ಪ್ರಕಾರವಾಗಿಯೂ ನಿನ್ನ ದಾಸನಿಗೆ ತಿಳಿಯಮಾಡುವ ಹಾಗೆ ಈ ದೊಡ್ಡ ಕಾರ್ಯಗಳನ್ನೆಲ್ಲಾ ಮಾಡಿದಿ.

7:22b.2SA.007.022 ಆದದರಿಂದ ಓ ಕರ್ತನಾದ ದೇವರೇ, ನೀನು ಮಹತ್ವವುಳ್ಳವನಾಗಿದ್ದೀ; ನಾವು ನಮ್ಮ ಕಿವಿಗಳಿಂದ ಕೇಳಿದ ಎಲ್ಲಾದರ ಪ್ರಕಾರ ನಿನ್ನ ಹಾಗೆ ಯಾರೂ ಇಲ್ಲ; ನಿನ್ನ ಹೊರತು ದೇವರು ಯಾರೂ ಇಲ್ಲ.

7:23b.2SA.007.023 ಭೂಲೋಕದಲ್ಲಿ ನಿನ್ನ ಜನರಾದ ಇಸ್ರಾಯೇಲ್ಯರಿಗೆ ಸಮಾನವಾದ ಜನಾಂಗ ಯಾವದು? ಅವರನ್ನು ಸ್ವಜನರಾಗಿ ವಿಮೋಚಿಸು ವಂತೆಯೂ ತನಗೆ ಹೆಸರನ್ನು ಪಡಕೊಳ್ಳುವಂತೆಯೂ ದೇವರು ಹೋದನು; ಅವರಿಗೋಸ್ಕರ ನಿನ್ನ ದೇಶಕ್ಕೆ, ಐಗುಪ್ತದಿಂದ ಜನಾಂಗಗಳಿಂದಲೂ ಅವರ ದೇವರು ಗಳಿಂದಲೂ ವಿಮೋಚಿಸಿದ ನಿನ್ನ ಜನರ ಮುಂದೆ ಈ ಮಹಾಭಯಂಕರವಾದ ಕಾರ್ಯಗಳನ್ನು ಮಾಡು ವದಕ್ಕಾಗಿಯೇ ದೇವರು ಹೋದನು.

7:24b.2SA.007.024 ಇಸ್ರಾ ಯೇಲ್‌ ಜನವನ್ನು ಸದಾಕಾಲಕ್ಕೂ ನಿನ್ನ ಜನರಾಗಿ ರುವ ಹಾಗೆ ನಿನಗೆ ಸ್ಥಿರಪಡಿಸಿಕೊಂಡಿದ್ದೀ; ಕರ್ತ ನಾದ ನೀನು ಅವರಿಗೆ ದೇವರಾಗಿದ್ದೀ.

7:25b.2SA.007.025 ಈಗ ಓ ಕರ್ತನಾದ ದೇವರೇ, ನೀನು ನಿನ್ನ ದಾಸನನ್ನು ಕುರಿತೂ ಅವನ ಮನೆಯನ್ನು ಕುರಿತೂ ಹೇಳಿದ ವಾಕ್ಯವನ್ನು ಶಾಶ್ವತಕ್ಕೂ ಸ್ಥಿರಪಡಿಸಿ ನೀನು ಹೇಳಿದ ಹಾಗೆಯೇ ಮಾಡು.

7:26b.2SA.007.026 ಸೈನ್ಯಗಳ ಕರ್ತನು ಇಸ್ರಾಯೇಲಿನ ಮೇಲೆ ದೇವರಾಗಿದ್ದಾನೆಂದು ಸದಾಕಾಲಕ್ಕೂ ನಿನ್ನ ನಾಮವು ಘನಹೊಂದಲಿ. ಇದಲ್ಲದೆ ನಿನ್ನ ದಾಸನಾದ ದಾವೀ ದನ ಮನೆಯು ನಿನ್ನ ಮುಂದೆ ಸ್ಥಿರವಾಗಿರಲಿ.

7:27b.2SA.007.027 ಸೈನ್ಯ ಗಳ ಓ ಕರ್ತನೇ, ಇಸ್ರಾಯೇಲಿನ ದೇವರೇ, ನಿನ್ನ ದಾಸನಿಗೆ--ನಾನು ನಿನಗೆ ಮನೆಯನ್ನು ಕಟ್ಟುವೆನೆಂದು ಪ್ರಕಟಮಾಡಿದ್ದರಿಂದ ನಿನ್ನನ್ನು ಕುರಿತು ಈ ಪ್ರಾರ್ಥನೆ ಯನ್ನು ಪ್ರಾರ್ಥಿಸುವದಕ್ಕೆ ನಿನ್ನ ದಾಸನ ಹೃದಯದಲ್ಲಿ ಉಂಟಾಯಿತು.

7:28b.2SA.007.028 ಈಗ ಓ ಕರ್ತನಾದ ದೇವರೇ, ನೀನೇ ದೇವರಾದಾತನು, ನಿನ್ನ ವಾಕ್ಯಗಳು ಸತ್ಯವು; ನಿನ್ನ ದಾಸನಿಗೆ ಈ ಒಳ್ಳೇದನ್ನು ವಾಗ್ದಾನಮಾಡಿದಿ.ಆದಕಾರಣ ಈಗ ನಿನ್ನ ದಾಸನ ಮನೆಯು ನಿನ್ನ ಮುಂದೆ ಸದಾಕಾಲಕ್ಕೂ ಇರುವ ಹಾಗೆ ಅದನ್ನು ಆಶೀರ್ವದಿಸಲು ನಿನ್ನ ಚಿತ್ತವಾಗಿರಲಿ, ಯಾಕಂದರೆ ಓ ಕರ್ತನಾದ ದೇವರೇ, ನೀನು ಅದನ್ನು ಹೇಳಿದಿ; ನಿನ್ನ ದಾಸನ ಮನೆಯು ಸದಾಕಾಲವೂ ನಿನ್ನ ಆಶೀರ್ವಾದದಿಂದ ಆಶೀರ್ವದಿಸಲ್ಪಟ್ಟಿರಲಿ ಎಂದು ಹೇಳಿದನು.

7:29b.2SA.007.029 ಆದಕಾರಣ ಈಗ ನಿನ್ನ ದಾಸನ ಮನೆಯು ನಿನ್ನ ಮುಂದೆ ಸದಾಕಾಲಕ್ಕೂ ಇರುವ ಹಾಗೆ ಅದನ್ನು ಆಶೀರ್ವದಿಸಲು ನಿನ್ನ ಚಿತ್ತವಾಗಿರಲಿ, ಯಾಕಂದರೆ ಓ ಕರ್ತನಾದ ದೇವರೇ, ನೀನು ಅದನ್ನು ಹೇಳಿದಿ; ನಿನ್ನ ದಾಸನ ಮನೆಯು ಸದಾಕಾಲವೂ ನಿನ್ನ ಆಶೀರ್ವಾದದಿಂದ ಆಶೀರ್ವದಿಸಲ್ಪಟ್ಟಿರಲಿ ಎಂದು ಹೇಳಿದನು.

8

8:1b.2SA.008.001 ಇದಾದ ಮೇಲೆ ಏನಾಯಿತಂದರೆ, ದಾವೀದನು ಫಿಲಿಷ್ಟಿಯರನ್ನು ಹೊಡೆದು ಅವರನ್ನು ಅಣಗಿಸಿ ಅವರ ಕೈಯಿಂದ ಮೇತೆಗಮ್ಮವನ್ನು ತಕ್ಕೊಂಡನು.

8:2b.2SA.008.002 ಇದಲ್ಲದೆ ಅವನು ಮೋವಾಬ್ಯರನ್ನು ಹೊಡೆದು ಅವರನ್ನು ಹಗ್ಗದಿಂದ ಅಳೆದು ನೆಲಕ್ಕೆ ಬೀಳಮಾಡಿದನು; ಅವರನ್ನು ಕೊಲ್ಲುವದಕ್ಕೆ ಎರಡು ದಾರಗಳಿಂದ, ಜೀವದಲ್ಲಿಡುವದಕ್ಕೆ ಒಂದು ಪೂರ್ಣ ವಾದ ಹಗ್ಗದಿಂದ ಅಳೆದನು. ಹಾಗೆಯೇ ಮೋವಾಬ್ಯರು ದಾವೀದನಿಗೆ ದಾಸರಾಗಿ ಅವನಿಗೆ ಕಪ್ಪವನ್ನು ತಂದರು.

8:3b.2SA.008.003 ಇದಲ್ಲದೆ ಚೋಬದ ಅರಸನಾಗಿರುವ ರೆಹೋಬನ ಮಗನಾದ ಹದದೆಜೆರನು ತನ್ನ ಮೇರೆಯನ್ನು ಕಟ್ಟಿ ಕೊಳ್ಳುವದಕ್ಕೆ ಹೋದಾಗ

8:4b.2SA.008.004 ದಾವೀದನು ಯೂಫ್ರೇ ಟಿಸ್‌ ನದಿಯ ಬಳಿಯಲ್ಲಿ ಅವನಿಗಿದ್ದ ಸಾವಿರ ರಥ ಗಳನ್ನೂ ಏಳು ನೂರು ಕುದುರೆ ರಾಹುತರನ್ನೂ ಇಪ್ಪತ್ತು ಸಾವಿರ ಕಾಲಾಳುಗಳನ್ನೂ ಹಿಡಿದು ನೂರು ರಥಗಳಿಗೆ ತಕ್ಕ ಕುದುರೆಗಳನ್ನು ಉಳಿಸಿ ಇತರ ಕುದುರೆಗಳ ಕಾಲಿನ ನರಗಳನ್ನು ಕೊಯ್ದುಬಿಟ್ಟನು.

8:5b.2SA.008.005 ಆದರೆ ದಮಸ್ಕದಲ್ಲಿರುವ ಅರಾಮ್ಯರು ಚೋಬದ ಅರಸನಾದ ಹದದೆಜೆರನಿಗೆ ಸಹಾಯಮಾಡುವದಕ್ಕೆ ಬಂದಾಗ ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಕೊಂದು ಹಾಕಿದನು.

8:6b.2SA.008.006 ತರುವಾಯ ಕಾವಲುದಂಡುಗಳನ್ನು ದಾವೀದನು ದಮಸ್ಕಕ್ಕೆ ಹೊಂದಿದ ಅರಾಮ್ಯದ ಠಾಣ ಗಳಲ್ಲಿ ಇಟ್ಟನು. ಹಾಗೆಯೇ ಅರಾಮ್ಯರು ದಾವೀದ ನಿಗೆ ದಾಸರಾಗಿ ಕಪ್ಪಗಳನ್ನು ತಂದರು; ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿ ದನು.

8:7b.2SA.008.007 ಆದರೆ ದಾವೀದನು ಹದದೆಜೆರನ ಸೇವಕ ರಿಗಿದ್ದ ಬಂಗಾರದ ಡಾಲುಗಳನ್ನು ತೆಗೆದುಕೊಂಡು ಅವುಗಳನ್ನು ಯೆರೂಸಲೇಮಿಗೆ ತಂದನು.

8:8b.2SA.008.008 ಇದಲ್ಲದೆ ಹದದೆಜೆರನ ಪಟ್ಟಣಗಳಾದ ಬೆಟಹದಿಂದಲೂ ಬೇರೋತೈಯಿಂದಲೂ ಅರಸನಾದ ದಾವೀದನು ಅತ್ಯ ಧಿಕವಾಗಿ ಹಿತ್ತಾಳೆಯನ್ನು ತೆಗೆದುಕೊಂಡು ಬಂದನು.

8:9b.2SA.008.009 ದಾವೀದನು ಹದದೆಜೆರನ ಎಲ್ಲಾ ಸೈನ್ಯವನ್ನು ಹೊಡೆದನೆಂದು ಹಮಾತಿನ ಅರಸನಾದ ತೋವು ಕೇಳಿದಾಗ

8:10b.2SA.008.010 ಅವನು ದಾವೀದನನ್ನು ವಂದಿಸುವ ದಕ್ಕೂ ಹರಸುವದಕ್ಕೂ ತನ್ನ ಮಗನಾದ ಯೋರಾಮ ನನ್ನು ಕಳುಹಿಸಿದನು; ಯಾಕಂದರೆ ತೋವಿಗೂ ಹದ ದೆಜೆರನಿಗೂ ವಿರೋಧವಾಗಿ ಯುದ್ಧಮಾಡಿದಾಗ ದಾವೀದನು ಅವನನ್ನು ಹೊಡೆದಿದ್ದನು; ಹದದೆಜೆರನಿಗೆ ತೋವು ಸಂಗಡ ಯುದ್ಧಗಳಿದ್ದವು. ಯೋರಾಮನು ಬೆಳ್ಳಿ ಬಂಗಾರ ಹಿತ್ತಾಳೆಯ ಪಾತ್ರೆಗಳನ್ನೂ ತನ್ನೊಂದಿಗೆ ತಂದನು.

8:11b.2SA.008.011 ಇವುಗಳನ್ನು ಅರಸನಾದ ದಾವೀದನು ವಶಮಾಡಿಕೊಂಡು ಅರಾಮ್ಯರೂ ಮೋವಾಬ್ಯರೂ ಅಮ್ಮೋನನ ಮಕ್ಕಳೂ ಫಿಲಿಷ್ಟಿಯರೂ ಅಮಾಲೇಕ್ಯರೂ ಎಂಬ ಸಕಲ ಜನಾಂಗಗಳಿಂದ ತೆಗೆದು

8:12b.2SA.008.012 ಪ್ರತಿಷ್ಠೆ ಮಾಡಿದ ಬೆಳ್ಳಿ ಬಂಗಾರದ ಸಂಗಡಲೂ ಚೋಬದ ಅರಸನಾಗಿರುವ ರೆಹೋಬನ ಮಗನಾದ ಹದದೆಜೆರನ ಬಳಿಯಲ್ಲಿ ಕೊಳ್ಳೆ ಇಟ್ಟದರ ಸಂಗಡಲೂ ಕರ್ತನಿಗೆ ಪ್ರತಿಷ್ಠೆಮಾಡಿ ಇಟ್ಟನು.

8:13b.2SA.008.013 ದಾವೀದನು ಉಪ್ಪಿನ ತಗ್ಗಿನಲ್ಲಿ ಹದಿನೆಂಟು ಸಾವಿರ ಅರಾಮ್ಯರನ್ನು ಹೊಡೆದು ಹಿಂತಿರುಗಿದಾಗ ಹೆಸರುಗೊಂಡನು.

8:14b.2SA.008.014 ಎದೋಮಿ ನಲ್ಲಿ ಕಾವಲುದಂಡುಗಳನ್ನು ಇಟ್ಟನು. ಎಲ್ಲಾ ಎದೋಮಿ ನಲ್ಲಿ ಅವನು ಕಾವಲುದಂಡುಗಳನ್ನು ಇಟ್ಟದ್ದರಿಂದ ಎದೋಮ್ಯರೆಲ್ಲರೂ ದಾವೀದನಿಗೆ ದಾಸರಾದರು. ದಾವೀದನು ಹೋದಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿದನು.

8:15b.2SA.008.015 ಹೀಗೆಯೇ ದಾವೀದನು ಎಲ್ಲಾ ಇಸ್ರಾಯೇಲಿನ ಮೇಲೆ ಆಳಿ ತನ್ನ ಎಲ್ಲಾ ಜನರಿಗೂ ನೀತಿ ನ್ಯಾಯಗಳನ್ನು ನಡಿಸುತ್ತಾ ಬಂದನು.

8:16b.2SA.008.016 ಚೆರೂಯಳ ಮಗನಾದ ಯೋವಾಬನು ಸೈನ್ಯಾಧಿಪತಿಯಾಗಿದ್ದನು; ಅಹೀಲೂ ದನ ಮಗನಾದ ಯೆಹೋಷಾಫಾಟನು ಲೇಖಕನಾ ಗಿದ್ದನು.

8:17b.2SA.008.017 ಅಹೀಟೂಬನ ಮಗನಾದ ಚಾದೋಕನೂ ಎಬ್ಯಾತಾರನ ಮಗನಾದ ಅಹೀಮೆಲೆಕನೂ ಯಾಜ ಕರಾಗಿದ್ದರು; ಸೆರಾಯನು ಮಂತ್ರಿಯಾಗಿದ್ದನು.ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಪೆಲೇತ್ಯರ ಮೇಲೆ ಯಜಮಾನನಾಗಿದ್ದನು. ಆದರೆ ದಾವೀದನ ಕುಮಾರರು ಮುಖ್ಯ ಪ್ರಭು ಗಳಾಗಿದ್ದರು.

8:18b.2SA.008.018 ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಪೆಲೇತ್ಯರ ಮೇಲೆ ಯಜಮಾನನಾಗಿದ್ದನು. ಆದರೆ ದಾವೀದನ ಕುಮಾರರು ಮುಖ್ಯ ಪ್ರಭು ಗಳಾಗಿದ್ದರು.

9

9:1b.2SA.009.001 ದಾವೀದನು--ಸೌಲನ ಮನೆಯವರಲ್ಲಿ ಯೋನಾತಾನನಿಗೋಸ್ಕರ ನಾನು ಅವನಿಗೆ ದಯೆತೋರಿಸುವ ಹಾಗೆ ಇನ್ನೂ ಯಾವನಾದರೂ ಉಳಿದಿದ್ದಾನೋ ಎಂದು ಕೇಳಿದನು.

9:2b.2SA.009.002 ಆಗ ಸೌಲನ ಮನೆಯ ದಾಸನಾದ ಚೀಬನೆಂಬವನು ಇದ್ದನು. ಅವನನ್ನು ದಾವೀದನ ಬಳಿಗೆ ಕರೆತಂದರು. ಅರಸನು ಅವನಿಗೆ--ನೀನು ಚೀಬನೋ ಅಂದನು. ಅದಕ್ಕ ವನು--ನಿನ್ನ ದಾಸನು ಅವನೇ ಅಂದನು.

9:3b.2SA.009.003 ಅರಸನು ಅವನಿಗೆ--ನಾನು ಅವನಿಗೆ ದೇವರ ದಯೆತೋರಿಸುವ ಹಾಗೆ ಸೌಲನ ಮನೆಯವರಲ್ಲಿ ಇನ್ನೂ ಯಾವನಾ ದರೂ ಇದ್ದಾನೋ ಅಂದನು. ಆಗ ಚೀಬನು ಅರಸ ನಿಗೆ--ಯೋನಾತಾನನಿಗೆ ಎರಡು ಕಾಲುಕುಂಟಾದ ಒಬ್ಬ ಮಗನಿದ್ದಾನೆ ಅಂದನು.

9:4b.2SA.009.004 ಅವನು ಎಲ್ಲಿ ಇದ್ದಾ ನೆಂದು ಅರಸನು ಅವನನ್ನು ಕೇಳಿದನು. ಚೀಬನು ಅರಸನಿಗೆ--ಇಗೋ, ಅವನು ಲೋದೆಬಾರಿನಲ್ಲಿರುವ ಅವ್ಮೆಾಯೇಲನ ಮಗನಾದ ಮಾಕೀರನ ಮನೆಯಲ್ಲಿ ಇದ್ದಾನೆ ಅಂದನು.

9:5b.2SA.009.005 ಅರಸನಾದ ದಾವೀದನು ಅವ ನನ್ನು ಆಗ ಲೋದೆಬಾರಿನಲ್ಲಿರುವ ಅವ್ಮೆಾಯೇಲನ ಮಗನಾದ ಮಾಕೀರನ ಮನೆಯಿಂದ ಕರೆಕಳುಹಿ ಸಿದನು.

9:6b.2SA.009.006 ಸೌಲನ ಮಗನಾಗಿರುವ ಯೋನಾತಾನನ ಮಗನಾದ ಮೆಫೀಬೋಶೆತನು ದಾವೀದನ ಬಳಿಗೆ ಬಂದು ಸಾಷ್ಟಾಂಗನಮಸ್ಕಾರಮಾಡಿದನು.

9:7b.2SA.009.007 ದಾವೀ ದನು--ಮೆಫೀಬೋಶೆತನೇ ಅಂದನು. ಅವನು--ಇಗೋ, ನಿನ್ನ ದಾಸನು ಅಂದನು. ಆಗ ದಾವೀದನು ಅವನಿಗೆ -- ಭಯಪಡಬೇಡ, ನಿನ್ನ ತಂದೆಯಾದ ಯೋನಾತಾನನ ನಿಮಿತ್ತ ನಾನು ನಿನಗೆ ಖಂಡಿತವಾಗಿ ದಯೆತೋರಿಸುವೆನು. ನಿನ್ನ ತಂದೆಯಾದ ಸೌಲನ ಭೂಮಿಯನ್ನೆಲ್ಲಾ ನಿನಗೆ ತಿರಿಗಿ ಕೊಡುವೆನು ನೀನು ನನ್ನ ಮೇಜಿನಲ್ಲಿ ನಿತ್ಯವೂ ಭೋಜನ ಮಾಡುವಿ ಅಂದನು.

9:8b.2SA.009.008 ಆಗ ಅವನು ಅಡ್ಡಬಿದ್ದು--ನೀನು ನನ್ನಂಥ ಸತ್ತನಾಯಿಯನ್ನು ದೃಷ್ಟಿಸುವ ಹಾಗೆ ನಿನ್ನ ದಾಸನು ಎಷ್ಟರವನು ಅಂದನು.

9:9b.2SA.009.009 ಆಗ ಅರಸನು ಸೌಲನ ದಾಸನಾದ ಚೀಬನನ್ನು ಕರೆದು ಅವನಿಗೆ--ನಾನು ಸೌಲನಿಗೂ ಅವನ ಎಲ್ಲ ಮನೆಗೂ ಹೊಂದಿದ ಎಲ್ಲವನ್ನೂ ನಿನ್ನ ಯಜಮಾನನ ಮಗನಿಗೆ ಕೊಟ್ಟಿದ್ದೇನೆ.

9:10b.2SA.009.010 ಆದದರಿಂದ ನೀನೂ ನಿನ್ನ ಕುಮಾರರೂ ನಿನ್ನ ದಾಸರೂ ನಿನ್ನ ಯಜಮಾನನ ಮಗನಿಗೆ ಆಹಾರ ಒದಗಿಸುವ ಹಾಗೆ ಅವನಿಗೋಸ್ಕರ ಭೂಮಿಯನ್ನು ವ್ಯವಸಾಯಮಾಡಿ ಅದರ ಫಲವನ್ನು ತರಬೇಕು. ಆದರೆ ನಿನ್ನ ಯಜಮಾನನ ಮಗನಾದ ಮೆಫೀಬೋಶೆ ತನು ನಿತ್ಯವೂ ನನ್ನ ಮೇಜಿನಲ್ಲಿ ಊಟ ಮಾಡುವನು ಅಂದನು. ಈ ಚೀಬನಿಗೆ ಹದಿನೈದು ಮಂದಿ ಕುಮಾ ರರೂ ಇಪ್ಪತ್ತು ಮಂದಿ ದಾಸರೂ ಇದ್ದರು.

9:11b.2SA.009.011 ಆಗ ಚೀಬನು ಅರಸನಿಗೆ--ಅರಸನಾದ ನನ್ನ ಒಡೆಯನು ತನ್ನ ದಾಸನಿಗೆ ಆಜ್ಞಾಪಿಸಿದ್ದನ್ನೆಲ್ಲಾ ನಿನ್ನ ದಾಸನು ಹಾಗೆಯೇ ಮಾಡುವನು ಅಂದನು. ಅರಸನ ಕುಮಾರ ರಲ್ಲಿ ಒಬ್ಬನ ಹಾಗೆ ಮೆಫೀಬೋಶೆತನು ಭೋಜನ ಮಾಡುವನೆಂದು ಅರಸನು ಹೇಳಿದನು.

9:12b.2SA.009.012 ಆದರೆ ಮೆಫೀಬೋಶೆತನಿಗೆ ವಿಾಕನೆಂಬ ಹೆಸರುಳ್ಳ ಒಬ್ಬ ಚಿಕ್ಕ ಮಗನಿದ್ದನು. ಚೀಬನ ಮನೆಯಲ್ಲಿ ವಾಸವಾ ಗಿದ್ದ ಎಲ್ಲರೂ ಮೆಫೀಬೋಶೆತನಿಗೆ ದಾಸರಾಗಿದ್ದರು.ಹೀಗೆಯೇ ಮೆಫೀಬೋಶೆತನು ಅರಸನ ಪಂಕ್ತಿಯಲ್ಲಿ ನಿತ್ಯವೂ ಭೋಜನ ಮಾಡುತ್ತಿದದ್ದರಿಂದ ಯೆರೂ ಸಲೇಮಿನಲ್ಲೇ ವಾಸವಾಗಿದ್ದನು. ಅವನ ಎರಡು ಕಾಲು ಕುಂಟಾಗಿದ್ದವು.

9:13b.2SA.009.013 ಹೀಗೆಯೇ ಮೆಫೀಬೋಶೆತನು ಅರಸನ ಪಂಕ್ತಿಯಲ್ಲಿ ನಿತ್ಯವೂ ಭೋಜನ ಮಾಡುತ್ತಿದದ್ದರಿಂದ ಯೆರೂ ಸಲೇಮಿನಲ್ಲೇ ವಾಸವಾಗಿದ್ದನು. ಅವನ ಎರಡು ಕಾಲು ಕುಂಟಾಗಿದ್ದವು.

10

10:1b.2SA.010.001 ಇದರ ತರುವಾಯ ಏನಾಯಿತಂದರೆ, ಅಮ್ಮೋನನ ಮಕ್ಕಳ ಅರಸನು ಸತ್ತನು; ಅವನ ಮಗನಾದ ಹಾನೂನನು ಅವನಿಗೆ ಬದಲಾಗಿ ಅರಸನಾದನು.

10:2b.2SA.010.002 ದಾವೀದನು--ಹಾನೂನನ ತಂದೆಯಾದ ನಾಹಾಷನು ನನಗೆ ದಯೆತೋರಿಸಿದ ಹಾಗೆಯೇ ನಾನೂ ಅವನ ಮಗನಾದ ಹಾನೂನನಿಗೆ ದಯೆತೋರಿಸುವೆನು ಅಂದನು. ದಾವೀದನು ಅವನ ತಂದೆಗೋಸ್ಕರ ಅವನಿಗೆ ಆದರಣೆ ಹೇಳುವದಕ್ಕೆ ತನ್ನ ಸೇವಕರನ್ನು ಕಳುಹಿಸಿದನು.

10:3b.2SA.010.003 ದಾವೀದನ ಸೇವಕರು ಅಮ್ಮೋನನ ಮಕ್ಕಳ ದೇಶಕ್ಕೆ ಬಂದಾಗ ಅಮ್ಮೋನನ ಮಕ್ಕಳ ಪ್ರಧಾನರು ತಮ್ಮ ಯಜಮಾನನಾದ ಹಾನೂನ ನಿಗೆ--ದಾವೀದನು ಆದರಣೆ ಹೇಳುವವರನ್ನು ನಿನ್ನ ಬಳಿಗೆ ಕಳುಹಿಸಿದ್ದರಿಂದ ನಿನ್ನ ತಂದೆಯನ್ನು ಘನ ಪಡಿಸುತ್ತಾನೆಂದು ಯೋಚಿಸುತ್ತೀಯೋ? ಈ ಪಟ್ಟಣ ವನ್ನು ಶೋಧಿಸುವದಕ್ಕೂ ಪಾಳತಿನೋಡುವದಕ್ಕೂ ಅದನ್ನು ಕೆಡವಿಹಾಕುವದಕ್ಕೂ ದಾವೀದನು ತನ್ನ ಸೇವಕರನ್ನು ನಿನ್ನ ಬಳಿಗೆ ಕಳುಹಿಸಿದ್ದಲ್ಲವೋ ಅಂದರು.

10:4b.2SA.010.004 ಆದದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿದು ಅವರ ಅರ್ಧ ಗಡ್ಡವನ್ನು ಬೋಳಿಸಿ ಅವರ ವಸ್ತ್ರಗಳನ್ನು ಮಧ್ಯದಲ್ಲಿ ಕುಂಡಿಯ ವರೆಗೆ ಕತ್ತರಿಸಿ ಅವರನ್ನು ಕಳುಹಿಸಿದನು.

10:5b.2SA.010.005 ಅವರು ಅದನ್ನು ದಾವೀದ ನಿಗೆ ತಿಳಿಸಿದಾಗ ಆ ಜನರು ಬಹಳ ನಾಚಿಕೆಪಟ್ಟದ್ದ ರಿಂದ ದಾವೀದನು ಕೆಲವರನ್ನು ಅವರಿಗೆದುರಾಗಿ ಕಳು ಹಿಸಿ--ನಿಮ್ಮ ಗಡ್ಡಗಳು ಬೆಳೆಯುವವರೆಗೆ ನೀವು ಯೆರಿಕೋವಿನಲ್ಲಿ ಕಾದಿದ್ದು ತರುವಾಯ ಬನ್ನಿರಿ ಎಂದು ಹೇಳಿದನು.

10:6b.2SA.010.006 ಅಮ್ಮೋನನ ಮಕ್ಕಳು ತಾವು ದಾವೀದನಿಗೆ ಅಸಹ್ಯ ವಾದೆವೆಂದು ತಿಳುಕೊಂಡಾಗ ಅವರು (ದೂತರನ್ನು) ಕಳುಹಿಸಿ ಬೇತ್‌ರೆಹೋಬ್‌ನಲ್ಲಿಯೂ ಚೋಬಾದ ಲ್ಲಿಯೂ ಇರುವ ಇಪ್ತತ್ತು ಸಾವಿರ ಕಾಲಾಳುಗಳಾದ ಅರಾಮ್ಯರನ್ನೂ ಅರಸನಾದ ಮಾಕನ ಬಳಿಯಿಂದ ಸಾವಿರ ಜನರನ್ನೂ ಇಷ್ಟೋಬ್‌ನಿಂದ ಹನ್ನೆರಡು ಸಾವಿರ ಜನರನ್ನೂ ಕೂಲಿಗೆ ತೆಗೆದುಕೊಂಡರು.

10:7b.2SA.010.007 ದಾವೀದನು ಅದನ್ನು ಕೇಳಿದಾಗ ಅವನು ಯೋವಾಬನನ್ನೂ ಪರಾ ಕ್ರಮಶಾಲಿಗಳಾದ ಸಕಲ ಶೂರಸೈನಿಕರನ್ನು ಕಳುಹಿ ಸಿದನು.

10:8b.2SA.010.008 ಆಗ ಅಮ್ಮೋನನ ಮಕ್ಕಳು ಹೊರಟು ಪಟ್ಟಣದ ಬಾಗಲ ಮುಂದೆ ವ್ಯೂಹಕಟ್ಟಿದರು. ಆದರೆ ಚೋಬಾದಿಂದಲೂ ರೆಹೋಬ್‌ನಿಂದಲೂ ಇಷ್ಟೋಬ್‌ ನಿಂದಲೂ ಮಾಕನಿಂದಲೂ ಬಂದ ಅರಾಮ್ಯರು ಹೊರಗೆ ಬೈಲಿನಲ್ಲಿ ಬೇರೆ ಇಳಿದಿದ್ದರು.

10:9b.2SA.010.009 ಯೋವಾಬನು ಯುದ್ಧದ ಮುಖವು ಹಿಂದೆ ಮುಂದೆ ತನಗೆ ಎದುರಾ ಗಿರುವದನ್ನು ನೋಡಿದಾಗ ಅವನು ಇಸ್ರಾಯೇಲಿನ ಆಯಲ್ಪಟ್ಟ ಎಲ್ಲಾ ಜನರನ್ನು ಆದುಕೊಂಡು ಅರಾಮ್ಯ ರಿಗೆ ಎದುರಾಗಿ ವ್ಯೂಹಕಟ್ಟಿದನು.

10:10b.2SA.010.010 ಆದರೆ ಮಿಕ್ಕಾದ ವರು ಅಮ್ಮೋನನ ಮಕ್ಕಳಿಗೆದುರಾಗಿ ವ್ಯೂಹಕಟ್ಟುವ ಹಾಗೆ ಅವರನ್ನು ತನ್ನ ಸಹೋದರನಾದ ಅಬೀಷೈಯ ಕೈಯಲ್ಲಿ ಒಪ್ಪಿಸಿಕೊಟ್ಟು--

10:11b.2SA.010.011 ಅರಾಮ್ಯರು ನನಗಿಂತ ಬಲವುಳ್ಳವರಾದರೆ ನೀನು ನನಗೆ ಸಹಾಯ ಕೊಡ ಬೇಕು; ಅಮ್ಮೋನನ ಮಕ್ಕಳು ನಿನಗಿಂತ ಬಲವುಳ್ಳವ ರಾದರೆ ನಾನು ಬಂದು ನಿನಗೆ ಸಹಾಯ ಮಾಡುವೆನು.

10:12b.2SA.010.012 ಬಲವಾಗಿರು; ನಾವು ನಮ್ಮ ಜನರಿಗೋಸ್ಕರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ಬಲಗೊ ಳ್ಳೋಣ. ಕರ್ತನು ತನ್ನ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ ಅಂದನು.

10:13b.2SA.010.013 ಆಗ ಯೋವಾಬನೂ ಅವನ ಸಂಗಡ ಇದ್ದ ಜನರೂ ಅರಾಮ್ಯರ ಮೇಲೆ ಯುದ್ಧ ಮಾಡುವದಕ್ಕೆ ಸವಿಾಪಕ್ಕೆ ಬಂದರು. ಅವರು ಅವನ ಎದುರಿನಿಂದ ಓಡಿಹೋದರು.

10:14b.2SA.010.014 ಅರಾಮ್ಯರು ಓಡಿ ಹೋದದ್ದನ್ನು ಅಮ್ಮೋನನ ಮಕ್ಕಳು ನೋಡಿದಾಗ ಅವರು ಅಬೀಷೈಯ ಎದುರಿನಿಂದ ಓಡಿ ಪಟ್ಟಣ ದೊಳಗೆ ಹೊಕ್ಕರು. ಆಗ ಯೋವಾಬನು ಅಮ್ಮೊನನ ಮಕ್ಕಳನ್ನು ಬಿಟ್ಟು ತಿರುಗಿ ಯೆರೂಸಲೇಮಿಗೆ ಬಂದನು.

10:15b.2SA.010.015 ಅರಾಮ್ಯರು ತಾವು ಇಸ್ರಾಯೇಲ್ಯರ ಮುಂದೆ ಹೊಡೆಯಲ್ಪಟ್ಟದ್ದನ್ನು ಕಂಡಾಗ ಅವರು ಒಟ್ಟಾಗಿ ಕೂಡಿದರು.

10:16b.2SA.010.016 ಇದಲ್ಲದೆ ಹದದೆಜೆರನು ನದಿಗೆ ಆಚೆ ಇದ್ದ ಅರಾಮ್ಯರನ್ನು ಕರೇಕಳುಹಿಸಿದ್ದರಿಂದ ಅವರು ಹೇಲಾಮಿಗೆ ಬಂದರು; ಹದದೆಜೆರನ ಸೈನ್ಯಕ್ಕೆ ಅಧಿ ಪತಿಯಾದ ಶೋಬಕನು ಅವರ ಮುಂದೆ ನಡೆದನು.

10:17b.2SA.010.017 ಅದು ದಾವೀದನಿಗೆ ತಿಳಿಸಲ್ಪಟ್ಟಾಗ ಅವನು ಇಸ್ರಾ ಯೇಲ್ಯರೆಲ್ಲರನ್ನು ಕೂಡಿಸಿಕೊಂಡು ಯೊರ್ದನನ್ನು ದಾಟಿ ಹೇಲಾಮಿಗೆ ಬಂದನು. ಅರಾಮ್ಯರು ದಾವೀದ ನಿಗೆದುರಾಗಿ ವ್ಯೂಹಕಟ್ಟಿ ಯುದ್ಧಮಾಡಿದರು.

10:18b.2SA.010.018 ಆಗ ಅರಾಮ್ಯರು ಇಸ್ರಾಯೇಲ್ಯರ ಎದುರಿನಿಂದ ಓಡಿದರು. ದಾವೀದನು ಅರಾಮ್ಯರಲ್ಲಿ ಏಳು ನೂರು ಮಂದಿ ಸಾರಥಿಗಳನ್ನೂ ನಾಲ್ವತ್ತು ಸಾವಿರ ಕುದುರೆ ರಾಹುತ ರನ್ನೂ ಕೊಂದು ಅವರ ಸೈನ್ಯದ ಯಜಮಾನನಾದ ಶೋಬಕನನ್ನು ಹೊಡೆದನು; ಅವನು ಅಲ್ಲಿಯೇ ಸತ್ತನು.ಹದದೆಜೆರನ ಸೇವಕರಾದ ಅರಸುಗಳೆ ಲ್ಲರೂ ತಾವು ಇಸ್ರಾಯೇಲ್ಯರ ಮುಂದೆ ಹೊಡೆಯ ಲ್ಪಟ್ಟದ್ದನ್ನು ಕಂಡಾಗ ಅವರು ಇಸ್ರಾಯೇಲ್ಯರ ಸಂಗಡ ಸಮಾಧಾನಮಾಡಿಕೊಂಡು ಅವರನ್ನು ಸೇವಿಸಿದರು.ಹೀಗೆ ಅರಾಮ್ಯರು ಅಮ್ಮೋನನ ಮಕ್ಕಳಿಗೆ ಇನ್ನು ಸಹಾಯಮಾಡುವದಕ್ಕೆ ಭಯಪಟ್ಟರು.

10:19b.2SA.010.019 ಹದದೆಜೆರನ ಸೇವಕರಾದ ಅರಸುಗಳೆ ಲ್ಲರೂ ತಾವು ಇಸ್ರಾಯೇಲ್ಯರ ಮುಂದೆ ಹೊಡೆಯ ಲ್ಪಟ್ಟದ್ದನ್ನು ಕಂಡಾಗ ಅವರು ಇಸ್ರಾಯೇಲ್ಯರ ಸಂಗಡ ಸಮಾಧಾನಮಾಡಿಕೊಂಡು ಅವರನ್ನು ಸೇವಿಸಿದರು.ಹೀಗೆ ಅರಾಮ್ಯರು ಅಮ್ಮೋನನ ಮಕ್ಕಳಿಗೆ ಇನ್ನು ಸಹಾಯಮಾಡುವದಕ್ಕೆ ಭಯಪಟ್ಟರು.

11

11:1b.2SA.011.001 ಒಂದು ವರುಷ ಕಳೆದ ತರುವಾಯ ಅರಸುಗಳು ಯುದ್ಧಕ್ಕೆ ಹೊರಡುವಾಗ ದಾವೀದನು ಯೋವಾಬನನ್ನೂ ಅವನ ಸಂಗಡವಿದ್ದ ಅವನ ಸೇವಕರನ್ನೂ ಎಲ್ಲಾ ಇಸ್ರಾಯೇಲ್ಯರನ್ನೂ ಕಳುಹಿಸಿದನು; ಅವರು ಅಮ್ಮೋನನ ಮಕ್ಕಳನ್ನು ಸಂಹ ರಿಸಿ ರಬ್ಬಕ್ಕೆ ಮುತ್ತಿಗೆ ಹಾಕಿದರು. ಆದರೆ ದಾವೀದನು ಇನ್ನೂ ಯೆರೂಸಲೇಮಿನಲ್ಲೇ ಕಾದಿದ್ದನು.

11:2b.2SA.011.002 ಆಗ ಆದದ್ದೇನಂದರೆ, ದಾವೀದನು ಒಂದು ದಿನ ಸಾಯಂಕಾಲದಲ್ಲಿ ತನ್ನ ಹಾಸಿಗೆಯಿಂದ ಎದ್ದು ಅರಮನೆಯ ಉಪ್ಪರಿಗೆಯ ಮೇಲೆ ತಿರುಗಾಡುತ್ತಾ ಇರುವಾಗ ಸ್ನಾನಮಾಡುತ್ತಿರುವ ಒಬ್ಬ ಸ್ತ್ರೀಯನ್ನು ಉಪ್ಪರಿಗೆಯ ಮೇಲಿನಿಂದ ನೋಡಿದನು.

11:3b.2SA.011.003 ಆ ಸ್ತ್ರೀಯು ಮಹಾಸೌಂದರ್ಯ ರೂಪವುಳ್ಳವಳಾಗಿದ್ದಳು. ಆಗ ದಾವೀದನು ಆ ಸ್ತ್ರೀ ಯಾರೆಂದು ಕೇಳುವದಕ್ಕೆ--ಕಳುಹಿಸಿದಾಗ ಒಬ್ಬನು--ಅವಳು ಹಿತ್ತಿಯನಾದ ಊರೀಯನ ಹೆಂಡತಿಯಾಗಿರುವ ಎಲೀಯಾಮನ ಮಗಳಾದ ಬತ್ಷೆಬೆಯಲ್ಲವೋ ಅಂದನು.

11:4b.2SA.011.004 ದಾವೀದನು ದೂತರನ್ನು ಕಳುಹಿಸಿ ಅವಳನ್ನು ಕರೆಯಿಸಿದನು. ಅವಳು ಅವನ ಬಳಿಗೆ ಬಂದಾಗ ಅವಳು ತನ್ನ ಮೈಲಿಗೆಯನ್ನು ಕಳಕೊಂಡು ಶುಚಿಯಾಗಿದ್ದದರಿಂದ ದಾವೀದನು ಅವಳ ಸಂಗಡ ಮಲಗಿದನು.

11:5b.2SA.011.005 ತರುವಾಯ ಆಕೆಯು ತನ್ನ ಮನೆಗೆ ಹೋದಳು. ಆ ಸ್ತ್ರೀಯು ಗರ್ಭಧರಿಸಿ ತಾನು ಗರ್ಭವತಿಯಾದೆನೆಂದು ದಾವೀದನಿಗೆ ಹೇಳಿ ಕಳುಹಿಸಿದಳು.

11:6b.2SA.011.006 ಆಗ ದಾವೀದನು ಹಿತ್ತಿಯನಾದ ಊರೀಯನನ್ನು ತನ್ನ ಬಳಿಗೆ ಕಳುಹಿಸೆಂದು ಯೋವಾಬನಿಗೆ ಹೇಳಿ ಕಳುಹಿಸಿದನು. ಹಾಗೆಯೇ ಯೋವಾಬನು ಊರೀಯ ನನ್ನು ದಾವೀದನ ಬಳಿಗೆ ಕಳುಹಿಸಿದನು.

11:7b.2SA.011.007 ಊರೀ ಯನು ದಾವೀದನ ಬಳಿಗೆ ಬಂದಾಗ ದಾವೀದನು ಅವನನ್ನು--ಯೋವಾಬನೂ ಜನರೂ ಹೇಗಿದ್ದಾರೆ ಮತ್ತು ಯುದ್ಧವೂ ಹೇಗಿದೆ ಎಂದು ವಿಚಾರಿಸಿದನು.

11:8b.2SA.011.008 ದಾವೀದನು ಊರೀಯನಿಗೆ--ನೀನು ನಿನ್ನ ಮನೆಗೆ ಹೋಗಿ ನಿನ್ನ ಕಾಲುಗಳನ್ನು ತೊಳಕೋ ಅಂದನು. ಊರೀಯನು ಅರಸನ ಮನೆಯಿಂದ ಹೊರಡುವಾಗ ಅರಸನ ಭೋಜನವು ಅವನ ಸಂಗಡವೇ ಹೋಯಿತು.

11:9b.2SA.011.009 ಆದರೆ ಊರೀಯನು ತನ್ನ ಮನೆಗೆ ಹೋಗದೆ ಅರಮನೆಯ ಬಾಗಲ ಬಳಿಯಲ್ಲಿ ತನ್ನ ಯಜಮಾನನ ಎಲ್ಲಾ ಸೇವಕರ ಸಂಗಡ ಮಲಗಿದ್ದನು.

11:10b.2SA.011.010 ಊರೀಯನು ತನ್ನ ಮನೆಗೆ ಹೋಗಲಿಲ್ಲವೆಂದು ದಾವೀದನಿಗೆ ತಿಳಿಸ ಲ್ಪಟ್ಟಾಗ ದಾವೀದನು ಊರೀಯನಿಗೆ -- ನೀನು ಪ್ರಯಾಣದಿಂದ ಬರಲಿಲ್ಲವೋ? ಯಾಕೆ ನಿನ್ನ ಮನೆಗೆ ಹೋಗಲಿಲ್ಲ ಅಂದನು.

11:11b.2SA.011.011 ಊರೀಯನು ದಾವೀದ ನಿಗೆ--ಮಂಜೂಷವೂ ಇಸ್ರಾಯೇಲ್ಯರೂ ಯೆಹೂದ ದವರೂ ಡೇರೆಗಳಲ್ಲಿ ವಾಸಿಸಿರುವಾಗಲೂ ನನ್ನ ಒಡೆಯನಾದ ಯೋವಾಬನೂ ನನ್ನ ಒಡೆಯನ ಸೇವ ಕರೂ ಬೈಲಿನಲ್ಲಿ ದಂಡಿಳಿದಿರುವಾಗ ನಾನು ಉಣ್ಣುವ ದಕ್ಕೂ ಕುಡಿಯುವದಕ್ಕೂ ನನ್ನ ಹೆಂಡತಿಯ ಸಂಗಡ ಮಲಗುವದಕ್ಕೂ ನನ್ನ ಮನೆಗೆ ಹೋಗಲೋ? ನಿನ್ನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ಈ ಕಾರ್ಯ ಮಾಡುವದಿಲ್ಲ ಅಂದನು.

11:12b.2SA.011.012 ಆಗ ದಾವೀದನು ಊರೀಯನಿಗೆ--ಈ ಹೊತ್ತು ಇಲ್ಲಿರು; ನಾಳೆ ನಿನ್ನನ್ನು ಕಳುಹಿಸುತ್ತೇನೆ ಅಂದನು. ಹಾಗೆಯೇ ಊರೀಯನು ಆ ದಿನವೂ ಮಾರನೆ ದಿನವೂ ಯೆರೂಸ ಲೇಮಿನಲ್ಲಿಯೇ ಇದ್ದನು.

11:13b.2SA.011.013 ದಾವೀದನು ಅವನನ್ನು ಕರೆದಾಗ ಅವನು ಅವನ ಮುಂದೆ ಉಂಡು ಕುಡಿದನು. ಇದಲ್ಲದೆ ದಾವೀದನು ಅವನನ್ನು ಅಮಲೇರುವಂತೆ ಮಾಡಿಸಿದನು. ಅವನು ಸಾಯಂಕಾಲದಲ್ಲಿ ತನ್ನ ಮನೆಗೆ ಹೋಗದೆ ತನ್ನ ಯಜಮಾನನ ಸೇವಕರ ಸಂಗಡ ಮಲಗುವದಕ್ಕೆ ಹೊರಟುಹೋದನು.

11:14b.2SA.011.014 ಉದಯದಲ್ಲಿ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದು ಊರೀಯನ ಕೈಯಲ್ಲಿ ಕಳುಹಿಸಿದನು.

11:15b.2SA.011.015 ಆ ಪತ್ರದಲ್ಲಿ--ಊರೀಯನನ್ನು ಘೋರವಾದ ಯುದ್ಧದ ಮುಂದುಗಡೆ ಸರಿಯಾಗಿ ನಿಲ್ಲಿಸಿ ಅವನು ಹೊಡೆಯಲ್ಪಟ್ಟು ಸಾಯುವ ಹಾಗೆ ಅವನನ್ನು ಬಿಟ್ಟು ನೀವು ಹಿಂದಕ್ಕೆ ಸರಿಯಿರಿ ಎಂದು ಬರೆದಿದ್ದನು.

11:16b.2SA.011.016 ಹಾಗೆಯೇ ಯೋವಾಬನು ಆ ಪಟ್ಟಣವನ್ನು ನೋಡಿಕೊಂಡಾಗ ಯಾವ ಸ್ಥಳದಲ್ಲಿ ಪರಾಕ್ರಮಶಾಲಿಗಳು ಇರುವರೆಂದು ತಿಳುಕೊಂಡನೋ ಅಲ್ಲಿ ಊರೀಯನನ್ನು ನಿಲ್ಲಿಸಿದನು.

11:17b.2SA.011.017 ಪಟ್ಟಣದ ಜನರು ಹೊರಟು ಯೋವಾಬನ ಸಂಗಡ ಯುದ್ಧ ಮಾಡುವಾಗ ದಾವೀದನ ಸೇವಕರಾದವರಲ್ಲಿ ಕೆಲವರು ಬಿದ್ದರು; ಇದಲ್ಲದೆ ಹಿತ್ತಿಯನಾದ ಊರೀಯನು ಸತ್ತನು.

11:18b.2SA.011.018 ಆಗ ಯೋವಾಬನು ಯುದ್ಧದ ವರ್ತಮಾನ ಗಳನ್ನೆಲ್ಲಾ ದಾವೀದನಿಗೆ ತಿಳಿಸುವದಕ್ಕೆ ದೂತನನ್ನು ಕಳುಹಿಸುವಾಗ ಅವನಿಗೆ ಹೇಳಿದ್ದೇನಂದರೆ--

11:19b.2SA.011.019 ನೀನು ಈ ಯುದ್ಧದ ವರ್ತಮಾನಗಳನ್ನೆಲ್ಲಾ ಅರಸನಿಗೆ ಹೇಳಿ ತೀರಿಸಿದ ತರುವಾಯ ಅರಸನಿಗೆ ಕೋಪ ಉರಿದು--

11:20b.2SA.011.020 ನೀವು ಯುದ್ಧಮಾಡುವದಕ್ಕಾಗಿ ಪಟ್ಟಣಕ್ಕೆ ಇಷ್ಟು ಸವಿಾಪವಾಗಿ ಸೇರಿದ್ದೇನು?

11:21b.2SA.011.021 ಅವರು ಗೋಡೆ ಯಿಂದ ಎಸೆಯುವರೆಂದು ನಿಮಗೆ ತಿಳಿದಿರಲಿಲ್ಲವೋ? ಯೆರುಬ್ಬೆಷೆತನ ಮಗನಾದ ಅಬೀಮೆಲೆಕನನ್ನು ಕೊಂದ ವರಾರು? ತೇಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಿನಿಂದ ಒಂದು ಬೀಸುವ ಕಲ್ಲಿನ ತುಂಡನ್ನು ಅವನ ಮೇಲೆ ಹಾಕಿದಾಗ ಅವನು ಸತ್ತನಲ್ಲವೇ? ನೀವು ಗೋಡೆಗೆ ಇಷ್ಟು ಸವಿಾಪವಾಗಿ ಹೋದದ್ದೇನು ಎಂದು ನಿನ್ನನ್ನು ಕೇಳಿದರೆ ಆಗ ನೀನು--ನಿನ್ನ ಸೇವಕ ನಾದ ಊರೀಯನೆಂಬ ಹಿತ್ತಿಯನು ಸತ್ತನೆಂದು ಹೇಳು ಅಂದನು.

11:22b.2SA.011.022 ಹಾಗೆಯೇ ಆ ದೂತನು ಹೋಗಿ ದಾವೀದನಿಗೆ ಯೋವಾಬನು ಕಳುಹಿಸಿದ ವರ್ತಮಾನ ಗಳನ್ನೆಲ್ಲಾ ತಿಳಿಸಿದನು.

11:23b.2SA.011.023 ಆ ದೂತನು ಅವನಿಗೆ--ಆ ಜನರು ನಿಶ್ಚಯವಾಗಿ ನಮ್ಮ ಮೇಲೆ ಬಲಗೊಂಡು ಬೈಲಿನಲ್ಲಿ ನಮ್ಮ ಮೇಲೆ ಹೊರಟು ಬಂದಾಗ ನಾವು ಪಟ್ಟಣದ ಬಾಗಿಲ ವರೆಗೆ ಅವರ ಮೇಲೆ ಬಂದೆವು.

11:24b.2SA.011.024 ಆಗ ಬಿಲ್ಲುಗಾರರು ಗೋಡೆಯ ಮೇಲಿನಿಂದ ನಿನ್ನ ಸೇವಕರ ಮೇಲೆ ಬಾಣಗಳನ್ನು ಎಸೆದಕಾರಣ ಅರಸನ ಸೇವಕರಲ್ಲಿ ಕೆಲವರು ಸತ್ತರು; ಇದಲ್ಲದೆ ನಿನ್ನ ಸೇವ ಕನಾದ ಊರೀಯನೆಂಬ ಹಿತ್ತಿಯನೂ ಸತ್ತನು ಅಂದನು.

11:25b.2SA.011.025 ಆಗ ದಾವೀದನು ಆ ದೂತನಿಗೆ--ನೀನು ಯೋವಾಬನಿಗೆ--ಈ ಕಾರ್ಯ ನಿನಗೆ ಮೆಚ್ಚಿಗೆ ಯಿಲ್ಲದ್ದಾಗಿ ಕಾಣಬಾರದು. ಯಾಕಂದರೆ ಕತ್ತಿಯು ಇವನನ್ನಾದರೂ ಸರಿ ಅವನನ್ನಾದರೂ ಸರಿ ತಿಂದು ಬಿಡುವದು. ನೀನು ಪಟ್ಟಣವನ್ನು ನಿರ್ಮೂಲಮಾಡುವ ಹಾಗೆ ಅದರ ಮೇಲೆ ನಿನ್ನ ಯುದ್ಧವು ಹೆಚ್ಚು ಬಲವಾಗಿರಲಿ ಎಂದು ಹೇಳಿ ಅವನನ್ನು ಬಲಪಡಿಸು ಅಂದನು.

11:26b.2SA.011.026 ತನ್ನ ಗಂಡನಾದ ಊರೀಯನು ಸತ್ತನೆಂದು ಊರೀಯನ ಹೆಂಡತಿಯು ಕೇಳಿದಾಗ ಅವಳು ತನ್ನ ಗಂಡನಿಗೋಸ್ಕರ ಗೋಳಾಡಿದಳು.ದುಃಖದ ದಿವ ಸಗಳು ತೀರಿದ ತರುವಾಯ ದಾವೀದನು ಅವಳನ್ನು ತನ್ನ ಮನೆಗೆ ಕರೇಕಳುಹಿಸಿದನು; ಅವಳು ಅವನಿಗೆ ಹೆಂಡತಿಯಾಗಿ ಒಬ್ಬ ಮಗನನ್ನು ಹೆತ್ತಳು; ಆದರೆ ದಾವೀದನು ಮಾಡಿದ ಈ ಕಾರ್ಯವು ಕರ್ತನ ದೃಷ್ಟಿಗೆ ಕೆಟ್ಟದ್ದಾಗಿತ್ತು.

11:27b.2SA.011.027 ದುಃಖದ ದಿವ ಸಗಳು ತೀರಿದ ತರುವಾಯ ದಾವೀದನು ಅವಳನ್ನು ತನ್ನ ಮನೆಗೆ ಕರೇಕಳುಹಿಸಿದನು; ಅವಳು ಅವನಿಗೆ ಹೆಂಡತಿಯಾಗಿ ಒಬ್ಬ ಮಗನನ್ನು ಹೆತ್ತಳು; ಆದರೆ ದಾವೀದನು ಮಾಡಿದ ಈ ಕಾರ್ಯವು ಕರ್ತನ ದೃಷ್ಟಿಗೆ ಕೆಟ್ಟದ್ದಾಗಿತ್ತು.

12

12:1b.2SA.012.001 ಕರ್ತನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ಅವನು ಅವನ ಬಳಿಗೆ ಬಂದು ಹೇಳಿದ್ದೇನಂದರೆ--ಒಂದು ಪಟ್ಟಣದಲ್ಲಿ ಇಬ್ಬರು ಮನುಷ್ಯರಿದ್ದರು; ಒಬ್ಬನು ಐಶ್ವರ್ಯವಂತನು, ಮತ್ತೊಬ್ಬನು ಬಡವನು.

12:2b.2SA.012.002 ಐಶ್ವರ್ಯವಂತನಿಗೆ ಕುರಿ ಪಶುಗಳು ಬಹಳವಾಗಿದ್ದವು.

12:3b.2SA.012.003 ಆದರೆ ಬಡವನಿಗೆ ತಾನು ಕೊಂಡುಕೊಂಡ ಒಂದು ಚಿಕ್ಕ ಹೆಣ್ಣುಕುರಿ ಮರಿಯ ಹೊರತು ಬೇರೇನೂ ಇರಲಿಲ್ಲ. ಅದು ಅವನ ಸಂಗಡವೂ ಅವನ ಮಕ್ಕಳ ಸಂಗಡವೂ ಬೆಳೆದು ಅವನೊಡನೆ ಆಹಾರ ತಿಂದು ಅವನ ಪಾತ್ರೆಯಲ್ಲಿ ಕುಡಿದು ಅವನ ಮಗ್ಗುಲಲ್ಲಿ ಮಲಗಿಕೊಂಡು ಅವನಿಗೆ ಕುಮಾರ್ತೆಯ ಹಾಗಿತ್ತು.

12:4b.2SA.012.004 ಐಶ್ವರ್ಯವುಳ್ಳ ಆ ಮನು ಷ್ಯನ ಬಳಿಗೆ ಒಬ್ಬ ಪ್ರಯಾಣಿಕನು ಬಂದಾಗ ಪ್ರಯಾಣ ಮಾಡುವವನಿಗೆ ಅಡಿಗೆಯನ್ನು ಮಾಡಿಸುವದಕ್ಕೆ ತನ್ನ ಕುರಿ ಪಶುಗಳಲ್ಲಿ ಒಂದನ್ನೂ ತಕ್ಕೊಳ್ಳ ಮನಸ್ಸಿಲ್ಲದೆ ಆ ಬಡವನ ಕುರಿಯನ್ನು ತಕ್ಕೊಂಡು ಅದನ್ನು ತನ್ನ ಬಳಿಗೆ ಬಂದ ಆ ಮನುಷ್ಯನಿಗೆ ಅಡಿಗೆಯನ್ನು ಮಾಡಿಸಿ ದನು ಅಂದನು.

12:5b.2SA.012.005 ಆಗ ದಾವೀದನು ಆ ಮನುಷ್ಯನ ಮೇಲೆ ಬಹಳ ಕೋಪಿಸಿಕೊಂಡು ನಾತಾನನಿಗೆ--ಕರ್ತನ ಜೀವದಾಣೆ, ಇದನ್ನು ಮಾಡಿದ ಆ ಮನುಷ್ಯನು ನಿಜವಾಗಿಯೂ ಸಾಯಬೇಕು.

12:6b.2SA.012.006 ಅವನು ಕರುಣೆ ಯಿಲ್ಲದೆ ಈ ಕಾರ್ಯವನ್ನು ಮಾಡಿದ್ದರಿಂದ ಆ ಕುರಿ ಗೋಸ್ಕರ ನಾಲ್ಕರಷ್ಟು ತಿರಿಗಿ ಕೊಡಬೇಕು ಅಂದನು.

12:7b.2SA.012.007 ಆಗ ನಾತಾನನು ದಾವೀದನಿಗೆ--ನೀನೇ ಆ ಮನು ಷ್ಯನು. ಇಸ್ರಾಯೇಲಿನ ದೇವರಾದ ಕರ್ತನು--ನಾನು ನಿನ್ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಮಾಡಿ ನಿನ್ನನ್ನು ಸೌಲನ ಕೈಗೆ ತಪ್ಪಿಸಿಬಿಟ್ಟು

12:8b.2SA.012.008 ನಿನ್ನ ಯಜಮಾನನ ಮನೆಯನ್ನೂ ನಿನ್ನ ಯಜಮಾನನ ಹೆಂಡತಿಯರನ್ನೂ ನಿನ್ನ ಎದೆಗೆ ಕೊಟ್ಟು ಇಸ್ರಾಯೇಲಿನ ಮನೆಯನ್ನೂ ಯೆಹೂದದ ಮನೆಯನ್ನೂ ನಿನಗೆ ಕೊಟ್ಟೆನು.

12:9b.2SA.012.009 ಇದು ಸಾಲದೆ ಇದ್ದರೆ ಇಂಥಿಂಥವುಗಳನ್ನು ನಿನಗೆ ಇನ್ನೂ ಕೊಡುತ್ತಿದ್ದೆನು. ನೀನು ಕರ್ತನ ದೃಷ್ಟಿಗೆ ಈ ಕೆಟ್ಟಕಾರ್ಯವನ್ನು ಮಾಡುವ ಹಾಗೆ ಆತನ ಆಜ್ಞೆ ಯನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿ ಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡಿ; ಇದಲ್ಲದೆ ಅವನನ್ನು ಅಮ್ಮೋನನ ಮಕ್ಕಳ ಕತ್ತಿಯಿಂದ ಕೊಂದು ಹಾಕಿಸಿದಿ.

12:10b.2SA.012.010 ಈಗ ನೀನು ನನ್ನನ್ನು ತಿರಸ್ಕರಿಸಿ ಹಿತ್ತಿಯ ನಾದ ಊರೀಯನ ಹೆಂಡತಿಯನ್ನು ನಿನಗೆ ಹೆಂಡತಿ ಯಾಗಿ ತೆಗೆದುಕೊಂಡದ್ದರಿಂದ ಕತ್ತಿಯು ಎಂದಿಗೂ ನಿನ್ನ ಮನೆಯನ್ನು ಬಿಟ್ಟು ಹೋಗುವುದಿಲ್ಲ ಎಂದು ಹೇಳುತ್ತಾನೆ.

12:11b.2SA.012.011 ಕರ್ತನು--ಇಗೋ, ನಾನು ನಿನ್ನ ಮನೆಯಲ್ಲಿ ಕೆಟ್ಟದ್ದನ್ನು ನಿನಗೆ ವಿರೋಧವಾಗಿ ಏಳುವಂತೆ ಮಾಡಿ ನಿನ್ನ ಕಣ್ಣುಗಳ ಮುಂದೆ ನಿನ್ನ ಹೆಂಡತಿಯರನ್ನು ತೆಗೆದು ನಿನ್ನ ನೆರೆಯವನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಸಂಗಡ ಮಲಗುವನು.

12:12b.2SA.012.012 ನೀನು ಅದನ್ನು ಮರೆಯಲ್ಲಿ ಮಾಡಿದಿ; ಆದರೆ ನಾನು ಈ ಕಾರ್ಯವನ್ನು ಇಸ್ರಾಯೇಲ್ಯರೆಲ್ಲರ ಮುಂದೆಯೂ ಸೂರ್ಯನ ಮುಂದೆಯೂ ಮಾಡುವೆನು ಅಂದನು.

12:13b.2SA.012.013 ಆಗ ದಾವೀದನು ನಾತಾನನಿಗೆ--ನಾನು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆನು ಅಂದನು. ನಾತಾನನು ದಾವೀದನಿಗೆ--ನೀನು ಸಾಯದಹಾಗೆ ಕರ್ತನು ನಿನ್ನ ಪಾಪವನ್ನು ಪರಿಹರಿಸಿದನು.

12:14b.2SA.012.014 ಹೇಗಿ ದ್ದರೂ ಈ ಕಾರ್ಯದಿಂದ ನೀನು ಕರ್ತನ ಶತ್ರುಗಳಿಗೆ ಬಹಳವಾಗಿ ದೇವದೂಷಣೆ ಮಾಡುವಂತೆ ಆಸ್ಪದ ಕೊಟ್ಟ ಕಾರಣ ನಿನಗೆ ಹುಟ್ಟಿದ ಮಗುವು ಸಹ ನಿಶ್ಚಯ ವಾಗಿ ಸಾಯುವದು ಅಂದನು.

12:15b.2SA.012.015 ಆಗ ನಾತಾನನು ತನ್ನ ಮನೆಗೆ ಹೋದನು.

12:16b.2SA.012.016 ಕರ್ತನು--ಊರೀಯನ ಹೆಂಡತಿಯು ದಾವೀದ ನಿಗೆ ಹೆತ್ತ ಕೂಸನ್ನು ಹೊಡೆದನು. ಅದು ಬಹಳ ಅಸ್ವಸ್ಥವಾಯಿತು. ದಾವೀದನು ಕೂಸಿಗೋಸ್ಕರ ದೇವ ರನ್ನು ಬೇಡಿಕೊಂಡನು. ಇದಲ್ಲದೆ ದಾವೀದನು ಉಪ ವಾಸಮಾಡಿ ಒಳಗೆ ಹೋಗಿ ರಾತ್ರಿಯೆಲ್ಲಾ ನೆಲದ ಮೇಲೆ ಬಿದ್ದುಕೊಂಡಿದ್ದನು.

12:17b.2SA.012.017 ಅವನನ್ನು ಎಬ್ಬಿಸುವದಕ್ಕೆ ಅವನ ಮನೆಯ ಹಿರಿಯರು ಅವನ ಬಳಿಗೆ ಬಂದರು; ಆದರೆ ಅವನಿಗೆ ಮನಸ್ಸಿಲ್ಲದೆ ಇತ್ತು. ಅವರ ಸಂಗಡ ಭೋಜನ ಮಾಡದೆ ಹೋದನು.

12:18b.2SA.012.018 ಮಗುವು ಏಳನೇ ದಿವಸ ಸತ್ತುಹೋಯಿತು. ಆಗ ಮಗುವು ಸತ್ತು ಹೋಯಿತೆಂದು ದಾವೀದನ ಸೇವಕರು ಅವನಿಗೆ ತಿಳಿ ಸುವದಕ್ಕೆ ಭಯಪಟ್ಟರು. ಯಾಕಂದರೆ ಇಗೋ, ಮಗುವು ಇನ್ನೂ ಬದುಕಿರುವಾಗ ನಾವು ಅವನ ಸಂಗಡ ಮಾತನಾಡುವಾಗ ಅವನು ನಮ್ಮ ಮಾತನ್ನು ಕೇಳದೆಹೋದನು. ಈಗ ಮಗುವು ಸತ್ತುಹೋಯಿ ತೆಂದು ನಾವು ಅವನಿಗೆ ಹೇಳಿದರೆ ಇನ್ನೂ ಎಷ್ಟು ಸಂಕಟಪಡುವನೋ ಅಂದುಕೊಂಡರು.

12:19b.2SA.012.019 ಆದರೆ ತನ್ನ ಸೇವಕರು ಪಿಸುಗುಟ್ಟುವದನ್ನು ದಾವೀದನು ನೋಡಿ ಮಗುವು ಸತ್ತುಹೋಯಿತೆಂದು ಗ್ರಹಿಸಿ ಕೊಂಡನು. ಆಗ ದಾವೀದನು ತನ್ನ ಸೇವಕರಿಗೆ--ಮಗುವು ಸತ್ತುಹೋಯಿತೋ ಅಂದನು. ಅವರು --ಸತ್ತುಹೋಯಿತು ಅಂದರು.

12:20b.2SA.012.020 ಆಗ ದಾವೀದನು ನೆಲದಿಂದ ಎದ್ದು ಸ್ನಾನಮಾಡಿ ತೈಲವನ್ನು ಹಚ್ಚಿಕೊಂಡ ವನಾಗಿ ಬದಲಿ ವಸ್ತ್ರಗಳನ್ನು ಧರಿಸಿಕೊಂಡು ಕರ್ತನ ಮಂದಿರಕ್ಕೆ ಹೋಗಿ ಆತನನ್ನು ಆರಾಧಿಸಿ ತನ್ನ ಮನೆಗೆ ಬಂದನು. ಅವನು ಕೇಳಿದಾಗ ಅವರು ಅವನ ಮುಂದೆ ಇಟ್ಟ ರೊಟ್ಟಿ ತಿಂದನು.

12:21b.2SA.012.021 ಅವನ ಸೇವಕರು ಅವನಿಗೆ --ಇದೇನು ನೀನು ಮಾಡಿದ್ದು? ಮಗುವು ಜೀವದಿಂದ ಇರುವಾಗ ನೀನು ಉಪವಾಸವಾಗಿದ್ದು ಅದಕ್ಕೋಸ್ಕರ ಅಳುತ್ತಿದ್ದಿ; ಆದರೆ ಮಗುವು ಸತ್ತಮೇಲೆ ನೀನು ಎದ್ದು ರೊಟ್ಟಿಯನ್ನು ತಿಂದಿ ಅಂದರು.

12:22b.2SA.012.022 ಅದಕ್ಕವನು--ಮಗುವು ಜೀವದಿಂದ ಇರುವಾಗ ಅದು ಬದುಕುವ ಹಾಗೆ ಕರ್ತನು ನನಗೆ ದಯಮಾಡುವನೇನೋ ಎಂದು ಉಪವಾಸಮಾಡಿ ಅತ್ತೆನು.

12:23b.2SA.012.023 ಆದರೆ ಈಗ ಸತ್ತಿದೆ ಯಲ್ಲಾ; ನಾನು ಉಪವಾಸ ಮಾಡುವದು ಯಾಕೆ? ನಾನು ಅದನ್ನು ತಿರಿಗಿ ಬರಮಾಡಬಲ್ಲೆನೋ? ನಾನು ಅದರ ಬಳಿಗೆ ಹೋಗುವೆನು; ಆದರೆ ಅದು ನನ್ನ ಬಳಿಗೆ ತಿರಿಗಿ ಬರುವದಿಲ್ಲ ಅಂದನು.

12:24b.2SA.012.024 ದಾವೀದನು ತನ್ನ ಹೆಂಡತಿಯಾದ ಬತ್ಷೆಬೆಯನ್ನು ಆದರಿಸಿ ಅವಳ ಬಳಿಗೆ ಹೋಗಿ ಅವಳ ಸಂಗಡ ಮಲಗಿದನು.ಅವಳು ಒಬ್ಬ ಮಗನನ್ನು ಹೆತ್ತಳು. ಅವನಿಗೆ ಸೊಲೊಮೋನನೆಂದು ಹೆಸರಿಟ್ಟನು. ಕರ್ತನು ಅವ ನನ್ನು ಪ್ರೀತಿಮಾಡಿದನು.

12:25b.2SA.012.025 ಪ್ರವಾದಿಯಾದ ನಾತಾ ನನ ಮುಖಾಂತರ ಕರ್ತನ ನಿಮಿತ್ತ ಅವನಿಗೆ ಯೆದೀದ್ಯ ನೆಂದು ಹೆಸರಿಟ್ಟನು.

12:26b.2SA.012.026 ಯೋವಾಬನು ಅಮ್ಮೋನನ ಮಕ್ಕಳ ರಬ್ಬದ ಮೇಲೆ ಯುದ್ಧಮಾಡಿ ರಾಜ್ಯದ ಪಟ್ಟಣವನ್ನು ಹಿಡಿದನು.

12:27b.2SA.012.027 ಯೋವಾಬನು ದಾವೀದನಿಗೆ--ನಾನು ರಬ್ಬದ ಮೇಲೆ ಯುದ್ಧಮಾಡಿ ನೀರುಗಳ ಪಟ್ಟಣವನ್ನು ಹಿಡಿದಿದ್ದೇನೆ.

12:28b.2SA.012.028 ಈಗ ನಾನು ಪಟ್ಟಣವನ್ನು ಹಿಡಿದು ಅದು ನನ್ನ ಹೆಸರಿನಿಂದ ಕರೆಯಲ್ಪಡದ ಹಾಗೆ ನೀನು ಜನರನ್ನು ಕೂಡಿಸಿಕೊಂಡು, ಬಂದು ಪಟ್ಟಣವನ್ನು ಮುತ್ತಿಗೆ ಹಾಕಿ ಹಿಡಿ ಎಂದು ಹೇಳಿ ದೂತರನ್ನು ಕಳುಹಿಸಿದನು.

12:29b.2SA.012.029 ಹಾಗೆಯೇ ದಾವೀದನು ಜನ ರೆಲ್ಲರನ್ನು ಕೂಡಿಸಿಕೊಂಡು ರಬ್ಬಕ್ಕೆ ಹೋಗಿ ಅದರ ಮೇಲೆ ಯುದ್ಧಮಾಡಿ ಅದನ್ನು ತೆಗೆದುಕೊಂಡನು.

12:30b.2SA.012.030 ಅದರ ಅರಸನ ತಲೆಯಮೇಲೆ ಇದ್ದ ಕಿರೀಟವನ್ನು ತೆಗೆದುಕೊಂಡನು. ಅದು ಬಂಗಾರದ್ದಾಗಿ ಒಂದು ತಲಾಂತಿನ ತೂಕವಾಗಿತ್ತು; ರತ್ನಗಳಿಂದ ಕೆತ್ತಲ್ಪಟ್ಟಿತ್ತು. ಅದು ದಾವೀದನ ತಲೆಯ ಮೇಲೆ ಇರಿಸಲ್ಪಟ್ಟಿತು. ಇದಲ್ಲದೆ ಅವನು ಆ ಪಟ್ಟಣದಿಂದ ಬಹು ಅಧಿಕವಾಗಿ ಕೊಳ್ಳೆಯನ್ನು ತಂದನು.ಆದರೆ ಅದರಲ್ಲಿದ್ದ ಜನರನ್ನು ಅವನು ಹೊರಗೆ ತಂದು ಅವರನ್ನು ಗರಗಸ ಸಲಿಕೆ ಕೊಡ್ಲಿಯ ಕೆಲಸಕ್ಕೂ ಇಟ್ಟಿಗೆ ಭಟ್ಟಿಯ ಕೆಲಸಕ್ಕೂ ಇಟ್ಟನು. ಈ ಪ್ರಕಾರವೇ ಅಮ್ಮೊನನ ಮಕ್ಕಳ ಎಲ್ಲಾ ಪಟ್ಟಣಗಳಿಗೂ ಮಾಡಿ ದಾವೀದನೂ ಜನರೆಲ್ಲರೂ ಯೆರೂಸಲೇಮಿಗೆ ತಿರಿಗಿ ಬಂದರು.

12:31b.2SA.012.031 ಆದರೆ ಅದರಲ್ಲಿದ್ದ ಜನರನ್ನು ಅವನು ಹೊರಗೆ ತಂದು ಅವರನ್ನು ಗರಗಸ ಸಲಿಕೆ ಕೊಡ್ಲಿಯ ಕೆಲಸಕ್ಕೂ ಇಟ್ಟಿಗೆ ಭಟ್ಟಿಯ ಕೆಲಸಕ್ಕೂ ಇಟ್ಟನು. ಈ ಪ್ರಕಾರವೇ ಅಮ್ಮೊನನ ಮಕ್ಕಳ ಎಲ್ಲಾ ಪಟ್ಟಣಗಳಿಗೂ ಮಾಡಿ ದಾವೀದನೂ ಜನರೆಲ್ಲರೂ ಯೆರೂಸಲೇಮಿಗೆ ತಿರಿಗಿ ಬಂದರು.

13

13:1b.2SA.013.001 ತರುವಾಯ ಏನಾಯಿತಂದರೆ, ದಾವೀದನ ಮಗನಾದ ಅಬ್ಷಾಲೋಮನಿಗೆ ತಾಮಾರಳೆಂಬ ಹೆಸರುಳ್ಳ ಸೌಂದರ್ಯವತಿಯಾದ ಒಬ್ಬ ಸಹೋದರಿ ಇದ್ದಳು. ಅವಳನ್ನು ದಾವೀದನ ಮಗನಾದ ಅಮ್ನೋನನು ಪ್ರೀತಿಮಾಡಿದನು.

13:2b.2SA.013.002 ತನ್ನ ಸಹೋದರಿಯಾದ ತಾಮಾರಳ ನಿಮಿತ್ತ ಬಹು ತಾಪಪಟ್ಟು ಅಸ್ವಸ್ಥನಾದನು; ಅವಳು ಕನ್ನಿಕೆಯಾಗಿದ್ದಳು; ಆದದರಿಂದ ಅವಳನ್ನು ಏನಾದರೂ ಮಾಡುವದಕ್ಕೆ ಅಮ್ನೋನನಿಗೆ ಕಷ್ಟವಾಗಿತ್ತು.

13:3b.2SA.013.003 ಆದರೆ ಅಮ್ನೋನನಿಗೆ ದಾವೀದನ ಸಹೋದರನಾಗಿರುವ ಶಿಮ್ಮನ ಮಗನಾದ ಯೋನಾದಾಬನೆಂಬ ಒಬ್ಬ ಸ್ನೇಹಿತನಿದ್ದನು. ಈ ಯೋನಾದಾಬನು ಮಹಾ ಕುಯುಕ್ತಿಯುಳ್ಳವನಾಗಿ ದ್ದನು.

13:4b.2SA.013.004 ಇವನು ಅವನಿಗೆ--ಅರಸನ ಮಗನಾದ ನೀನು ದಿನದಿನಕ್ಕೆ ಯಾಕೆ ಕ್ಷೀಣನಾಗಿ ಹೋಗುತ್ತೀ? ನನಗೆ ತಿಳಿಸುವದಿಲ್ಲವೋ ಅಂದನು. ಅದಕ್ಕೆ ಅಮ್ನೋನನು ಅವನಿಗೆ--ನಾನು ನನ್ನ ಸಹೋದರನಾಗಿರುವ ಅಬ್ಷಾ ಲೋಮನ ಸಹೋದರಿಯಾದ ತಾಮಾರಳನ್ನು ಪ್ರೀತಿ ಮಾಡುತ್ತೇನೆ ಅಂದನು.

13:5b.2SA.013.005 ಆಗ ಯೋನಾದಾಬನು ಅವನಿಗೆ--ನೀನು ರೋಗಿಷ್ಟನ ಹಾಗೆ ಮಂಚದ ಮೇಲೆ ಮಲಗು; ನಿನ್ನನ್ನು ನೋಡುವದಕ್ಕೆ ನಿನ್ನ ತಂದೆ ಬರುವಾಗ ನೀನು ಅವನಿಗೆ--ನನ್ನ ಸಹೋದರಿಯಾದ ತಾಮಾರಳು ಬರುವ ಹಾಗೆ ದಯಮಾಡಬೇಕು; ನಾನು ಅವಳ ಕೈಯಿಂದ ಉಣ್ಣುವ ಹಾಗೆ ಅವಳು ನನ್ನ ಕಣ್ಣೆದುರಿನಲ್ಲಿ ಅಡಿಗೆಯನ್ನು ಮಾಡಿ ನನಗೆ ಆಹಾರ ಕೊಡಲಿ ಎಂದು ಹೇಳು ಅಂದನು.

13:6b.2SA.013.006 ಅವನು ಅದೇ ಪ್ರಕಾರ ರೋಗಿಷ್ಟನ ಹಾಗೆ ಮಲಗಿದನು. ಅರಸನು ತನ್ನನ್ನು ನೋಡುವದಕ್ಕೆ ಬಂದಾಗ ಅಮ್ನೋನನು ಅರಸನಿಗೆ--ನೀನು ನನ್ನ ಸಹೋದರಿಯಾದ ತಾಮಾರಳು ಬರುವ ಹಾಗೆ ದಯಮಾಡಬೇಕು; ನಾನು ಅವಳ ಕೈಯಿಂದ ಉಣ್ಣುವ ಹಾಗೆ ಅವಳು ನನ್ನ ಕಣ್ಣುಮುಂದೆ ಎರಡು ಭಕ್ಷ್ಯಗಳನ್ನು ಮಾಡುವದಕ್ಕೆ ಬರಲಿ ಅಂದನು.

13:7b.2SA.013.007 ಆಗ ದಾವೀದನು ತನ್ನ ಮನೆಯಲ್ಲಿರುವ ತಾಮಾರಳ ಬಳಿಗೆ ಮನುಷ್ಯನನ್ನು ಕಳುಹಿಸಿ--ನೀನು ನಿನ್ನ ಸಹೋದರನಾದ ಅಮ್ನೋನನ ಮನೆಗೆ ಹೋಗಿ ಅವನಿಗೆ ಅಡಿಗೆಯನ್ನು ಮಾಡು ಅಂದನು.

13:8b.2SA.013.008 ಹಾಗೆಯೇ ತನ್ನ ಸಹೋದರನಾದ ಅಮ್ನೋನನ ಮನೆಗೆ ಹೋದಳು. ಆಗ ಅವನು ಮಲಗಿದ್ದನು. ಅವಳು ಹಿಟ್ಟನ್ನು ತೆಗೆದುಕೊಂಡು ಅವನ ಕಣ್ಣು ಮುಂದೆ ಹಿಸಿಕಿ ನಾದಿ ಭಕ್ಷ್ಯಗಳನ್ನು ಮಾಡಿ ಪಾತ್ರೆ ತಕ್ಕೊಂಡು ಅವನ ಮುಂದೆ ಇಟ್ಟಳು.

13:9b.2SA.013.009 ಆದರೆ ಅಮ್ನೋನನು--ನಾನು ಉಣ್ಣುವದಿಲ್ಲ ಎಂದು ಹೇಳಿ ನನ್ನ ಬಳಿಯಿಂದ ಎಲ್ಲಾ ಜನರನ್ನು ಕಳುಹಿಸಿಬಿಡಿರಿ ಅಂದನು. ಹಾಗೆಯೇ ಎಲ್ಲರೂ ಅವನನ್ನು ಬಿಟ್ಟು ಹೊರಗೆ ಹೋದರು.

13:10b.2SA.013.010 ಆಗ ಅಮ್ನೋನನು--ನಾನು ನಿನ್ನ ಕೈಯಿಂದ ತಿನ್ನುವಂತೆ ಆ ಭಕ್ಷ್ಯಗಳನ್ನು ಕೊಠಡಿ ಯೊಳಗೆ ತೆಗೆದುಕೊಂಡು ಬಾ ಅಂದನು. ಹಾಗೆಯೇ ತಾಮಾರಳು ತಾನು ಮಾಡಿದ ಭಕ್ಷ್ಯಗಳನ್ನು ಕೊಠಡಿ ಯೊಳಗೆ ತನ್ನ ಸಹೋದರನಾದ ಅಮ್ನೋನನ ಬಳಿಗೆ ತಕ್ಕೊಂಡು ಬಂದಳು.

13:11b.2SA.013.011 ಆದರೆ ಅವನು ಅವುಗಳನ್ನು ಉಣ್ಣುವ ಹಾಗೆ ಅವಳು ಅವನ ಬಳಿಗೆ ತಂದಾಗ ಅವನು ಅವಳನ್ನು ಹಿಡಿದು ಅವಳಿಗೆ--ನನ್ನ ಸಹೋ ದರಿಯೇ, ನನ್ನ ಸಂಗಡ ಮಲಗು; ಬಾ ಅಂದನು.

13:12b.2SA.013.012 ಅದಕ್ಕವಳು--ನನ್ನ ಸಹೋದರನೇ, ಬೇಡ; ನನ್ನನ್ನು ಒತ್ತಾಯಮಾಡಬೇಡ; ಯಾಕಂದರೆ ಇಸ್ರಾಯೇಲಿನಲ್ಲಿ ಇಂಥಾ ಕಾರ್ಯಮಾಡಕೂಡದು; ಇಂಥಾ ಬುದ್ಧಿಹೀನ ವಾದ ಕೆಲಸ ಮಾಡಬೇಡ.

13:13b.2SA.013.013 ನಾನಾದರೋ ನನ್ನ ನಿಂದೆಯನ್ನು ಎಲ್ಲಿಗೆ ಹೋಗಮಾಡಲಿ; ಇದಲ್ಲದೆ ನೀನು ಇಸ್ರಾಯೇಲಿನಲ್ಲಿ ಬುದ್ಧಿಹೀನರೊಳಗೆ ಒಬ್ಬನ ಹಾಗೆ ಇರುವಿ. ಹಾಗಾದರೆ ಈಗ ದಯಮಾಡಿ ಅರಸನ ಸಂಗಡ ಮಾತನಾಡು; ಅವನು ನಿನ್ನ ಬಳಿಯಿಂದ ನನ್ನನ್ನು ಹೇಗಾದರೂ ಹಿಂತೆಗೆಯುವುದಿಲ್ಲ ಅಂದಳು.

13:14b.2SA.013.014 ಅವನು ಅವಳ ಮಾತನ್ನು ಕೇಳಲೊಲ್ಲದೆ ತಾನು ಅವಳಿಗಿಂತ ಬಲವುಳ್ಳವನಾಗಿದ್ದದರಿಂದ ಅವಳನ್ನು ಕುಂದಿಸಿ ಅವಳ ಸಂಗಡ ಮಲಗಿದನು.

13:15b.2SA.013.015 ಆಗ ಅಮ್ನೊನನು ಅವಳನ್ನು ಅತ್ಯಂತ ಹಗೆಮಾಡಿದನು; ಅವನು ಅವಳನ್ನು ಹಗೆಮಾಡಿದ ಹಗೆಯು ಮೊದಲು ಮಾಡಿದ ಪ್ರೀತಿಗಿಂತ ಅಧಿಕವಾಗಿತ್ತು; ಆದದರಿಂದ ಅಮ್ನೋನನು ಅವಳಿಗೆ--ಎದ್ದು ಹೋಗು ಅಂದನು.

13:16b.2SA.013.016 ಆಗ ಅವಳು ಅವನಿಗೆ--ಇದಕ್ಕೆ ಕಾರಣವಿಲ್ಲ; ನನಗೆ ಮಾಡಿದ ಆ ಕೆಟ್ಟತನಕ್ಕಿಂತ ನೀನು ನನ್ನನ್ನು ಕಳುಹಿಸಿಬಿಡುವ ಈ ಕೆಟ್ಟತನವು ಮತ್ತೂ ಅಧಿಕವಾಗಿದೆ ಅಂದಳು.

13:17b.2SA.013.017 ಆದರೆ ಅವನು ಅವಳ ಮಾತನ್ನು ಕೇಳಲೊಲ್ಲದೆ ತನ್ನನ್ನು ಸೇವಿಸುವ ತನ್ನ ದಾಸರನ್ನು ಕರೆದು--ಇವಳನ್ನು ನನ್ನ ಬಳಿಯಿಂದ ಹೊರಗೆ ತಳ್ಳಿ ಬಾಗಲು ಮುಚ್ಚಿ ಬೀಗಹಾಕು ಅಂದನು.

13:18b.2SA.013.018 ಅವಳು ವಿವಿಧವಾದ ವಸ್ತ್ರವನ್ನು ಉಟ್ಟಿದ್ದಳು; ಯಾಕಂದರೆ ಅರಸನ ಕುಮಾರ್ತೆಯರಾದ ಕನ್ಯಾಸ್ತ್ರೀಯರು ಇಂಥಾ ನಿಲುವಂಗಿಗಳನ್ನು ಧರಿಸಿಕೊಳ್ಳುತ್ತಿದ್ದರು. ಆದರೆ ಅವನ ಸೇವಕನು ಅವಳನ್ನು ಹೊರಗೆ ಕಳುಹಿಸಿ ಬಾಗಲು ಮುಚ್ಚಿ ಬೀಗಹಾಕಿದನು.

13:19b.2SA.013.019 ಆಗ ತನ್ನ ತಲೆಯಮೇಲೆ ಬೂದಿಯನ್ನು ಹಾಕಿಕೊಂಡು ತಾನು ಧರಿಸಿಕೊಂಡಿದ್ದ ವಿವಿಧವಾದ ವಸ್ತ್ರವನ್ನು ಹರಿದು ತನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಅಳುತ್ತಾ ಹೋದಳು.

13:20b.2SA.013.020 ಆಗ ಅವಳ ಸಹೋದರನಾದ ಅಬ್ಷಾಲೋಮನು ಅವಳಿಗೆ --ನಿನ್ನ ಸಹೋದರನಾದ ಅಮ್ನೋನನು ನಿನ್ನ ಸಂಗಡ ಇದ್ದನೋ? ನನ್ನ ಸಹೋದರಿಯೇ, ಈಗ ಮೌನ ವಾಗಿರು; ಅವನು ನಿನ್ನ ಸಹೋದರನು; ಈ ಕಾರ್ಯ ವನ್ನು ನಿನ್ನ ಮನಸ್ಸಿಗೆ ಹಚ್ಚಿಕೊಳ್ಳಬೇಡ ಅಂದನು. ಹಾಗೆಯೇ ತಾಮಾರಳು ತನ್ನ ಸಹೋದರನಾದ ಅಬ್ಷಾಲೋಮನ ಮನೆಯಲ್ಲಿ ಒಂಟಿಗಳಾಗಿದ್ದಳು.

13:21b.2SA.013.021 ಅರಸನಾದ ದಾವೀದನು ಇವುಗಳನೆಲ್ಲಾ ಕೇಳಿದಾಗ ಬಹುಕೋಪಗೊಂಡನು.

13:22b.2SA.013.022 ಅಬ್ಷಾಲೋಮನು ತನ್ನ ಸಹೋದರನಾದ ಅಮ್ನೋನನ ಸಂಗಡ ಒಳ್ಳೇದಾ ದರೂ ಕೆಟ್ಟದ್ದಾದರೂ ಮಾತನಾಡದೆ ಇದ್ದನು. ಅವನು ತನ್ನ ಸಹೋದರಿಯಾದ ತಾಮಾರಳನ್ನು ಬಲವಂತ ಮಾಡಿದ್ದರಿಂದ ಅಬ್ಷಾಲೋಮನು ಅವನನ್ನು ಹಗೆ ಮಾಡಿದನು.

13:23b.2SA.013.023 ಎರಡು ವರುಷ ಪೂರ್ಣಮುಗಿದ ತರುವಾಯ ಏನಾಯಿತಂದರೆ, ಅಬ್ಷಾಲೋಮನಿಗೆ ಎಫ್ರಾಯಾಮ್‌ ಬಳಿಯಲ್ಲಿರುವ ಬಾಳ್‌ಹಾಚೋರಿನಲ್ಲಿ ಕುರಿಗಳ ಉಣ್ಣೆ ಕತ್ತರಿಸುವವರಿದ್ದರು. ಆದದರಿಂದ ಅಬ್ಷಾಲೋಮನು ಅರಸನ ಮಕ್ಕಳನ್ನೆಲ್ಲಾ ಔತಣಕ್ಕೆ ಕರೆದನು.

13:24b.2SA.013.024 ಇದಲ್ಲದೆ ಅಬ್ಷಾಲೋಮನು ಅರಸನ ಬಳಿಗೆ ಹೋಗಿ--ಇಗೋ, ಈಗ ನಿನ್ನ ಸೇವಕನಿಗೆ ಉಣ್ಣೆ ಕತ್ತರಿಸುವವರು ಇದ್ದಾರೆ; ಅರಸನೂ ತನ್ನ ಸೇವಕರೂ ನಿನ್ನ ಸೇವಕನ ಸಂಗಡ ಬರಲಿ ಅಂದನು.

13:25b.2SA.013.025 ಅದಕ್ಕೆ ಅರಸನು ಅಬ್ಷಾಲೋಮ ನಿಗೆ--ಹಾಗಲ್ಲ; ನನ್ನ ಮಗನೇ, ನಾವು ನಿನಗೆ ಭಾರವಾಗಿರದ ಹಾಗೆ ನಾವೆಲ್ಲರು ಈಗ ಬರುವದಿಲ್ಲ ಅಂದನು. ಅವನು ರಾಜನನ್ನು ಬಲವಂತ ಮಾಡಿದನು; ಆದರೆ ಅವನು ಹೋಗಲೊಲ್ಲದೆ ಅವನನ್ನು ಆಶೀ ರ್ವದಿಸಿದನು.

13:26b.2SA.013.026 ಆಗ ಅಬ್ಷಾಲೋಮನು--ಹಾಗಾ ದರೆ ನನ್ನ ಸಹೋದರನಾದ ಅಮ್ನೋನನು ನಮ್ಮ ಸಂಗಡ ಬರಲಿ ಅಂದನು.

13:27b.2SA.013.027 ಅರಸನು ಅವನಿಗೆ--ಯಾಕೆ ಅವನು ನಿಮ್ಮ ಸಂಗಡ ಬರಬೇಕು ಅಂದನು. ಆದರೆ ಅಬ್ಷಾಲೋಮನು ಅವನನ್ನು ಬಲವಂತ ಮಾಡಿದ್ದರಿಂದ ಅವನು ಅಮ್ನೋನನನ್ನೂ ಅರಸನ ಎಲ್ಲಾ ಮಕ್ಕಳನ್ನೂ ಅವನ ಸಂಗಡ ಕಳುಹಿಸಿದನು.

13:28b.2SA.013.028 ಆದರೆ ಅಬ್ಷಾಲೋಮನು ತನ್ನ ಸೇವಕರಿಗೆ--ನೀವು ನೋಡಿಕೊಳ್ಳಿರಿ; ಅಮ್ನೋನನ ಹೃದಯವು ದ್ರಾಕ್ಷಾರಸ ದಿಂದ ಸಂಭ್ರಮವಾಗಿರುವಾಗ ನಾನು ನಿಮಗೆ ಅಮ್ನೋನ ನನ್ನು ಹೊಡೆಯಿರಿ ಎಂದು ಹೇಳುತ್ತಲೇ ಅವನನ್ನು ಕೊಂದುಹಾಕಿರಿ; ಭಯಪಡಬೇಡಿರಿ ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ. ಬಲವಾಗಿರಿ; ಪರಾಕ್ರಮಿಗಳಾ ಗಿರ್ರಿ; ಎಂದು ಆಜ್ಞಾಪಿಸಿ ಹೇಳಿದನು.

13:29b.2SA.013.029 ಅಬ್ಷಾಲೋ ಮನು ಆಜ್ಞಾಪಿಸಿದ ಹಾಗೆಯೇ ಅವನ ಸೇವಕರು ಅಮ್ನೋನನಿಗೆ ಮಾಡಿದರು. ಆಗ ಅರಸನ ಮಕ್ಕಳೆ ಲ್ಲರೂ ಎದ್ದು ತಮ್ಮ ತಮ್ಮ ಹೇಸರ ಕತ್ತೆಗಳನ್ನೇರಿ ಓಡಿಹೋದರು.

13:30b.2SA.013.030 ಆದರೆ ಅವರು ದಾರಿಯಲ್ಲಿರುವಾಗ--ಅಬ್ಷಾ ಲೋಮನು ಅರಸನ ಮಕ್ಕಳನ್ನೆಲ್ಲಾ ಕೊಂದು ಹಾಕಿ ದ್ದಾನೆ, ಒಬ್ಬನಾದರೂ ಉಳಿಯಲಿಲ್ಲ ಎಂದು ದಾವೀ ದನಿಗೆ ವರ್ತಮಾನ ಬಂತು.

13:31b.2SA.013.031 ಆಗ ಅರಸನು ಎದ್ದು ತನ್ನ ವಸ್ತ್ರಗಳನ್ನು ಹರಿದುಕೊಂಡು ನೆಲದ ಮೇಲೆ ಬಿದ್ದನು; ಅವನ ಸೇವಕರೆಲ್ಲರೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು ಅವನ ಸುತ್ತಲೂ ನಿಂತರು.

13:32b.2SA.013.032 ಆದರೆ ದಾವೀದನ ಸಹೋದರನಾದ ಶಿಮ್ಮನ ಮಗನಾಗಿ ರುವ ಯೋನಾದಾಬನು ದಾವೀದನಿಗೆ--ಒಡೆಯನೇ, ನನ್ನ ಅರಸನ ಮಕ್ಕಳಾದ ಯೌವನಸ್ಥರೆಲ್ಲರನ್ನು ಕೊಂದುಹಾಕಿದರೆಂದು ನೆನಸಬೇಡ; ಅಮ್ನೋನನು ಮಾತ್ರವೇ ಸತ್ತನು; ಅಬ್ಷಾಲೋಮನು ತನ್ನ ಸಹೋ ದರಿಯಾದ ತಾಮಾರಳನ್ನು ಅಮ್ನೋನನು ಬಲವಂತ ಮಾಡಿದ ದಿನ ಮೊದಲುಗೊಂಡು ಈ ಕಾರ್ಯವನ್ನು ಮಾಡುವದಕ್ಕೆ ತನ್ನ ಮನಸ್ಸಿನಲ್ಲಿ ಸ್ಥಿರಮಾಡಿದ್ದನು;

13:33b.2SA.013.033 ಆದದರಿಂದ ಅರಸನಾದ ನನ್ನ ಒಡೆಯನೇ ಅರಸನ ಮಕ್ಕಳೆಲ್ಲರು ಸತ್ತರೆಂಬುವ ಮಾತನ್ನು ನಿನ್ನ ಮನಸ್ಸಿನ ಲ್ಲಿಡಬೇಡ; ಯಾಕಂದರೆ ಅಮ್ನೋನನು ಒಬ್ಬನೇ ಸತ್ತನು ಅಂದನು.

13:34b.2SA.013.034 ಆದರೆ ಅಬ್ಷಾಲೋಮನು ಓಡಿ ಹೋದನು; ಆಗ ಕಾವಲುಗಾರನು ತನ್ನ ಕಣ್ಣುಗಳ ನ್ನೆತ್ತಿ ನೋಡುವಾಗ ಇಗೋ, ಅವನ ಹಿಂಭಾಗದಲ್ಲಿ ಬೆಟ್ಟದ ಪಾರ್ಶ್ವದ ಮಾರ್ಗವಾಗಿ ಅನೇಕ ಜನರು ಬರುತ್ತಿದ್ದರು.

13:35b.2SA.013.035 ಆಗ ಯೋನಾದಾಬನು ಅರಸನಿಗೆಇಗೋ, ಅರಸನ ಮಕ್ಕಳು ಬರುತ್ತಿದ್ದಾರೆ; ನಿನ್ನ ಸೇವ ಕನು ಹೇಳಿದ ಹಾಗೆಯೇ ಆಯಿತು ಅಂದನು.

13:36b.2SA.013.036 ಅವನು ಮಾತನಾಡಿ ತೀರಿಸಿದಾಗ ಇಗೋ, ಅರಸನ ಮಕ್ಕಳು ಬಂದು ಗಟ್ಟಿಯಾಗಿ ಅತ್ತರು. ಅರಸನೂ ಅವನ ಎಲ್ಲಾ ಸೇವಕರೂ ಬಹಳವಾಗಿ ಅತ್ತರು.

13:37b.2SA.013.037 ಆದರೆ ಅಬ್ಷಾ ಲೋಮನು ಓಡಿಹೋಗಿ ಗೆಷೂರಿನ ಅರಸನಾಗಿರುವ ಅವ್ಮೆಾಹೂದನ ಮಗನಾದ ತಲ್ಮೈಯನ ಬಳಿಗೆ ಹೋದನು. ದಾವೀದನು ದಿನಂಪ್ರತಿ ತನ್ನ ಮಗನಿಗಾಗಿ ದುಃಖಪಡುತ್ತಿದ್ದನು.

13:38b.2SA.013.038 ಹೀಗೆಯೇ ಅಬ್ಷಾಲೋಮನು ಗೆಷೂರಿಗೆ ಓಡಿ ಹೋಗಿ ಅಲ್ಲಿ ಮೂರು ವರುಷ ಇದ್ದನು.ಆದರೆ ದಾವೀದನು ಅಬ್ಷಾಲೋಮನ ಬಳಿಗೆ ಹೋಗುವ ದಕ್ಕೆ ಆಸೆಪಡುತ್ತಿದ್ದನು. ಯಾಕಂದರೆ ಅಮ್ನೋನನು ಸತ್ತುಹೋದದರಿಂದ ಅರಸನಾದ ದಾವೀದನು ಅವನಿ ಗೋಸ್ಕರ ಆದರಣೆಹೊಂದಿದನು.

13:39b.2SA.013.039 ಆದರೆ ದಾವೀದನು ಅಬ್ಷಾಲೋಮನ ಬಳಿಗೆ ಹೋಗುವ ದಕ್ಕೆ ಆಸೆಪಡುತ್ತಿದ್ದನು. ಯಾಕಂದರೆ ಅಮ್ನೋನನು ಸತ್ತುಹೋದದರಿಂದ ಅರಸನಾದ ದಾವೀದನು ಅವನಿ ಗೋಸ್ಕರ ಆದರಣೆಹೊಂದಿದನು.

14

14:1b.2SA.014.001 ಅರಸನ ಹೃದಯವು ಅಬ್ಷಾಲೋಮನ ಕಡೆಗೆ ಇರುವದನ್ನು ಚೆರೂಯಳ ಮಗನಾದ ಯೋವಾಬನು ತಿಳಿದು.

14:2b.2SA.014.002 ತೆಕೋವದಿಂದ ಜ್ಞಾನವುಳ್ಳ ಒಬ್ಬ ಸ್ತ್ರೀಯನ್ನು ಕರೇ ಕಳುಹಿಸಿ ಅವಳಿಗೆ ನಿನ್ನನ್ನು ಬೇಡಿಕೊಳ್ಳುವದೇನಂದರೆ--ನೀನು ಗೋಳಾ ಡುವವಳ ಹಾಗೆ ನಟನೆ ಮಾಡಿ ಶೋಕವಸ್ತ್ರಗಳನ್ನು ಧರಿಸಿಕೊಂಡು

14:3b.2SA.014.003 ತಲೆಗೆ ಎಣ್ಣೆಹಚ್ಚಿಕೊಳ್ಳದೆ ಸತ್ತವರಿ ಗೋಸ್ಕರ ಅನೇಕ ದಿವಸಗಳಿಂದ ದುಃಖಿಸುವವಳ ಹಾಗಿದ್ದು ಅರಸನ ಬಳಿಗೆ ಹೋಗಿ ಅವನ ಸಂಗಡ ಈ ಪ್ರಕಾರ ಮಾತನಾಡು ಎಂದು ಹೇಳಿ ಯೋವಾ ಬನು ಅವಳಿಗೆ ಕಲಿಸಿಕೊಟ್ಟನು.

14:4b.2SA.014.004 ಹಾಗೆಯೇ ತೆಕೋವಿನವಳಾದ ಆ ಸ್ತ್ರೀಯು ಅರಸನ ಸಂಗಡ ಮಾತನಾಡಿ ನೆಲಕ್ಕೆ ಬಿದ್ದು ಭಕ್ತಿ ಗೌರವದಿಂದ ವಂದಿಸಿ--ಅರಸೇ, ಸಹಾಯಮಾಡು ಎಂದು ಕೇಳಿ ಕೊಂಡಳು.

14:5b.2SA.014.005 ಅರಸನು ಅವಳಿಗೆ ನಿನಗೆ ಏನಾಯಿತು ಅಂದನು. ಅದಕ್ಕವಳು--ನಾನು ನಿಶ್ಚಯವಾಗಿ ವಿಧವೆ ಯಾದ ಸ್ತ್ರೀಯು; ನನ್ನ ಗಂಡನು ಸತ್ತುಹೋಗಿದ್ದಾನೆ.

14:6b.2SA.014.006 ಆದರೆ ನಿನ್ನ ಸೇವಕಳಿಗೆ ಇಬ್ಬರು ಕುಮಾರರಿದ್ದರು; ಅವರಿಬ್ಬರೂ ಹೊಲದಲ್ಲಿ ಹೊಡೆದಾಡಿದರು; ಅವ ರನ್ನು ಬಿಡಿಸುವವರು ಯಾರೂ ಇಲ್ಲದ್ದರಿಂದ ಒಬ್ಬನು ಮತ್ತೊಬ್ಬನನ್ನು ಹೊಡೆದು ಕೊಂದುಹಾಕಿದನು.

14:7b.2SA.014.007 ಆದದರಿಂದ ಇಗೋ, ಕುಟುಂಬದವರೆಲ್ಲರು ನಿನ್ನ ಸೇವಕಳ ಮೇಲೆ ವಿರೋಧವಾಗಿ ಎದ್ದು--ತನ್ನ ಸಹೋ ದರನನ್ನು ಕೊಂದವನನ್ನು ಅವನ ಸಹೋದರನ ಪ್ರಾಣಕ್ಕೋಸ್ಕರ ನಾವು ಅವನನ್ನು ಕೊಲ್ಲುವ ಹಾಗೆಯೂ ಬಾಧ್ಯವನ್ನು ಸಹ ನಾಶಮಾಡಿಬಿಡುವ ಹಾಗೆಯೂ ಅವನನ್ನು ಒಪ್ಪಿಸಿಕೊಡು ಎಂದು ಹೇಳಿ ದರು. ಹೀಗೆಯೇ ಅವರು ನನಗೆ ಉಳಿದಿರುವ ನನ್ನ ಕೆಂಡವನ್ನು ಆರಿಸಿ ಭೂಮಿಯ ಮೇಲೆ ನನ್ನ ಗಂಡನ ಹೆಸರನ್ನೂ ಸಂತಾನವನ್ನೂ ಉಳಿಯ ಬಿಡುವದಿಲ್ಲ ಅಂದಳು.

14:8b.2SA.014.008 ಆಗ ಅರಸನು ಆ ಸ್ತ್ರೀಗೆ--ನೀನು ನಿನ್ನ ಮನೆಗೆ ಹೋಗು; ನಾನು ನಿನ್ನ ವಿಷಯವಾಗಿ ಆಜ್ಞಾಪಿಸುತ್ತೇನೆ ಅಂದನು.

14:9b.2SA.014.009 ಆದರೆ ತೆಕೋವಿನ ಸ್ತ್ರೀಯು ಅರಸನಿಗೆ--ಅರಸನಾದ ನನ್ನ ಒಡೆಯನೇ, ಆ ಅಕ್ರಮವು ನನ್ನ ಮೇಲೆಯೂ ನನ್ನ ತಂದೆಯ ಮನೆಯ ಮೇಲೆಯೂ ಇರಲಿ; ಅರಸನೂ ಅವನ ಸಿಂಹಾಸನವೂ ನಿರಾಪರಾಧವಾಗಿರಲಿ ಅಂದಳು.

14:10b.2SA.014.010 ಅದಕ್ಕೆ ಅರಸನು--ಯಾವನಾದರೂ ನಿನಗೆ ಏನಾದರೂ ಹೇಳಿದರೆ ಅವನನ್ನು ನನ್ನ ಬಳಿಗೆ ಕರ ಕೊಂಡು ಬಾ; ಅವನು ಇನ್ನು ನಿನ್ನನ್ನು ಎಂದಿಗೂ ಮುಟ್ಟದಂತೆ ಮಾಡುವೆನು ಅಂದನು.

14:11b.2SA.014.011 ಆಗ ಅವಳು--ರಕ್ತ ವಿಚಾರಕನು ಇನ್ನು ಸಂಹರಿಸದ ಹಾಗೆ ಅರಸನಾದ ನೀನು ನಿನ್ನ ದೇವರಾದ ಕರ್ತನನ್ನು ಜ್ಞಾಪಕಮಾಡು; ಅವರು ನನ್ನ ಮಗನನ್ನು ನಾಶಮಾಡ ಬಾರದು ಅಂದಳು. ಅದಕ್ಕವನು--ಕರ್ತನ ಜೀವ ದಾಣೆ, ನಿನ್ನ ಮಗನ ತಲೆಯ ಕೂದಲಲ್ಲಿ ಒಂದಾದರೂ ನೆಲದ ಮೇಲೆ ಬೀಳುವದಿಲ್ಲ ಅಂದನು.

14:12b.2SA.014.012 ಆಗ ಆ ಸ್ತ್ರೀಯು--ಅರಸನಾದ ನನ್ನ ಒಡೆಯನ ಸಂಗಡ ನಿನ್ನ ದಾಸಿಯು ಒಂದು ಮಾತನ್ನು ಹೇಳುವದಕ್ಕೆ ಅಪ್ಪಣೆ ಆಗಬೇಕು ಅಂದಳು.

14:13b.2SA.014.013 ಆಗ ಅವನು--ಹೇಳು ಅಂದನು. ಆಗ ಆ ಸ್ತ್ರೀಯು--ದೇವರ ಜನರಿಗೆ ವಿರೋಧವಾಗಿ ಅಂಥಾ ಕಾರ್ಯವನ್ನು ನೀನು ನೆನೆಸು ವದೇನು? ಅರಸನು ತಾನು ಹೊರಡಿಸಿದವನನ್ನು ತಿರಿಗಿ ಸೇರಿಸಿಕೊಳ್ಳದೆ ಹೋದದರಿಂದ ಇದನ್ನು ಅಪರಾಧಸ್ಥನ ಹಾಗೆಯೇ ಮಾತಾಡುತ್ತಿದ್ದಾನೆ.

14:14b.2SA.014.014 ನಾವು ಸಾಯುವದು ಅವಶ್ಯವೇ. ನೆಲದ ಮೇಲೆ ಚೆಲ್ಲಲ್ಪಟ್ಟು ತಿರಿಗಿ ಕೂಡಿಸಲ್ಪಡದ ನೀರಿನ ಹಾಗೆ ಇದ್ದೇವೆ. ಆದರೆ ದೇವರು ಯಾರನ್ನೂ ಲಕ್ಷ್ಯಮಾಡುವಾತನಲ್ಲ. ಆದರೂ ಹೊರಡಿಸಲ್ಪಟ್ಟವನು ಹೊರಡಿಸಲ್ಪಟ್ಟಿರದ ಹಾಗೆ ಆಲೋಚನೆಗಳನ್ನು ಮಾಡುವಾತನಾಗಿದ್ದಾನೆ.

14:15b.2SA.014.015 ಆದದರಿಂದ ಈಗ ಜನರು ನನ್ನನ್ನು ಭಯಪಡಿಸಿ ದ್ದರಿಂದ ಈ ಕಾರ್ಯವನ್ನು ಕುರಿತು ನನ್ನ ಒಡೆಯನಾದ ಅರಸನ ಸಂಗಡ ನಿನ್ನ ದಾಸಿಯಾದ ನಾನು ಮಾತನಾ ಡುವದಕ್ಕೆ ಬಂದೆನು.

14:16b.2SA.014.016 ನಿನ್ನ ದಾಸಿಯಾದ ನಾನು ಅರಸನ ಬಳಿಗೆ ಹೋಗುತ್ತೇನೆ; ಒಂದು ವೇಳೆ ಅರಸನು ತನ್ನ ದಾಸಿಯ ಕಾರ್ಯವನ್ನು ನೆರವೇರಿಸಿಯಾನು. ಅರಸನು ಕೇಳಿ ನನ್ನನ್ನು ನನ್ನ ಮಗನನ್ನೂ ದೇವರ ಬಾಧ್ಯತೆಯಲ್ಲಿಂದ ನಾಶಮಾಡಬೇಕಾದ ಮನುಷ್ಯರ ಕೈಯಿಂದ ದಾಸಿಯನ್ನು ತಪ್ಪಿಸುವನು ಎಂದು ಅಂದುಕೊಂಡೆನು.

14:17b.2SA.014.017 ಆಗ ನಿನ್ನ ದಾಸಿಯು--ಅರಸ ನಾದ ನನ್ನ ಒಡೆಯನ ಮಾತು ಆದರಣೆಯಾಗಿರಲಿ; ಒಳ್ಳೇದನ್ನೂ ಕೆಟ್ಟದ್ದನ್ನೂ ವಿವೇಚಿಸುವ ಹಾಗೆ ಅರಸ ನಾದ ನನ್ನ ಒಡೆಯನು ದೇವದೂತನ ಹಾಗೆ ಇದ್ದಾನೆ; ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಅಂದಳು.

14:18b.2SA.014.018 ಆಗ ಅರಸನು ಪ್ರತ್ಯುತ್ತರವಾಗಿ ಆ ಸ್ತ್ರೀಗೆ--ನಾನು ನಿನ್ನಿಂದ ಕೇಳುವದನ್ನು ನನಗೆ ಮರೆಮಾಡಬೇಡ ಅಂದನು. ಅದಕ್ಕವಳು--ಅರಸನಾದ ನನ್ನ ಒಡೆಯನು ಮಾತನಾಡಲಿ ಅಂದಳು.

14:19b.2SA.014.019 ಅದಕ್ಕೆ ಅರಸನು--ಇದೆಲ್ಲಾದರಲ್ಲಿ ಯೋವಾಬನ ಕೈ ನಿನ್ನ ಸಂಗಡ ಉಂಟಲ್ಲವೋ ಅಂದನು. ಆ ಸ್ತ್ರೀಯು ಪ್ರತ್ಯುತ್ತರವಾಗಿ--ನಿನ್ನ ಪ್ರಾಣದ ಜೀವದಾಣೆ, ಅರಸ ನಾದ ನನ್ನ ಒಡೆಯನೇ, ನೀನು ಹೇಳುವವುಗಳಲ್ಲಿ ಒಂದನ್ನಾದರೂ ಯಾವನೂ ಎಡಗಡೆಗಾದರೂ ಬಲ ಗಡೆಗಾದರೂ ತಿರಿಗಿಸಕೂಡದು. ನಿನ್ನ ಸೇವಕನಾದ ಯೋವಾಬನು ನನಗೆ ಆಜ್ಞಾಪಿಸಿ ಈ ಎಲ್ಲಾ ಮಾತು ಗಳನ್ನು ನಿನ್ನ ಸೇವಕಳಿಗೆ ಹೇಳಿಕೊಟ್ಟನು.

14:20b.2SA.014.020 ಈ ಮಾತಿನ ರೂಪವನ್ನು ತಿರುಗಿಸುವದಕ್ಕೆ ನಿನ್ನ ಸೇವಕನಾದ ಯೋವಾಬನು ಇದನ್ನು ಮಾಡಿದ್ದಾನೆ. ಆದರೆ ಭೂಮಿ ಯಲ್ಲಿ ನಡಿಯುವದನ್ನೆಲ್ಲಾ ತಿಳಿಯುವದಕ್ಕೆ ದೇವ ದೂತನ ಜ್ಞಾನದ ಹಾಗೆಯೇ ನನ್ನ ಒಡೆಯನು ಜ್ಞಾನವುಳ್ಳವನಾಗಿದ್ದಾನೆ ಅಂದಳು.

14:21b.2SA.014.021 ಆದದರಿಂದ ಅರಸನು ಯೋವಾಬನಿಗೆಇಗೋ, ನಾನು ಈ ಕಾರ್ಯವನ್ನು ಮಾಡಿದೆನು; ನೀನು ಹೋಗಿ ಯೌವನಸ್ಥನಾದ ಅಬ್ಷಾಲೋಮ ನನ್ನು ತಿರಿಗಿ ಕರಕೊಂಡು ಬಾ ಅಂದನು.

14:22b.2SA.014.022 ಆಗ ಯೋವಾಬನು ನೆಲಕ್ಕೆ ಬಿದ್ದು ಬೊಗ್ಗಿಕೊಂಡು ಅರಸ ನಿಗೆ ವಂದಿಸಿದನು. ಯೋವಾಬನು--ಅರಸನು ತನ್ನ ಸೇವಕನ ಮಾತಿನ ಪ್ರಕಾರ ಮಾಡಿದ್ದರಿಂದ ನನ್ನ ಒಡೆಯನಾದ ಅರಸನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಿತೆಂಬದು ಈ ಹೊತ್ತು ನಿನ್ನ ಸೇವಕನಿಗೆ ತಿಳಿಯಿತು ಅಂದನು.

14:23b.2SA.014.023 ಹಾಗೆಯೇ ಯೋವಾಬನು ಎದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಯೆರೂಸಲೇಮಿಗೆ ಕರಕೊಂಡು ಬಂದನು.

14:24b.2SA.014.024 ಆದರೆ ಅರಸನು--ಅವನು ತನ್ನ ಮನೆಗೆ ತಿರುಗಿ ಹೋಗಲಿ; ಅವನು ನನ್ನ ಮುಖವನ್ನು ನೋಡಬಾರದು ಅಂದನು. ಆದದರಿಂದ ಅಬ್ಷಾಲೋಮನು ಅರಸನ ಮುಖವನ್ನು ನೋಡದೆ ತನ್ನ ಮನೆಗೆ ತಿರುಗಿ ಹೋದನು.

14:25b.2SA.014.025 ಎಲ್ಲಾ ಇಸ್ರಾಯೇಲ್ಯರಲ್ಲಿ ಬಹಳ ಹೊಗಳಲ್ಪ ಡತಕ್ಕ ಅಬ್ಷಾಲೋಮನಿಗೆ ಸಮಾನನಾದ ಸೌಂದರ್ಯ ವುಳ್ಳವನು ಒಬ್ಬನೂ ಇರಲಿಲ್ಲ. ಅವನ ಅಂಗಾಲು ಮೊದಲ್ಗೊಂಡು ನಡುನೆತ್ತಿಯ ವರೆಗೂ ಅವನಲ್ಲಿ ಒಂದು ಕಳಂಕವಾದರೂ ಇಲ್ಲದೆ ಇತ್ತು.

14:26b.2SA.014.026 ಅವನು ತನ್ನ ತಲೆಯ ಕೂದಲು ಭಾರವಾಗಿದೆ ಎಂದು ಪ್ರತಿವರುಷದ ಕೊನೆಯಲ್ಲಿ ಬೋಳಿಸಿಕೊಳ್ಳುವನು; ಬೋಳಿಸಿಕೊಳ್ಳುವಾಗ ಅವನ ತಲೆಯ ಕೂದಲು ಅರಸನ ತೂಕದ ಪ್ರಕಾರ ಇನ್ನೂರು ಶೆಕೇಲು ತೂಕವಾಗಿರುವದು.

14:27b.2SA.014.027 ಅಬ್ಷಾಲೋಮನಿಗೆ ಮೂರು ಮಂದಿ ಕುಮಾರರೂ ತಾಮಾರ್‌ ಎಂಬ ಒಬ್ಬ ಕುಮಾರ್ತೆಯೂ ಹುಟ್ಟಿದರು. ಇವಳು ಸೌಂದರ್ಯ ವುಳ್ಳ ಸ್ತ್ರೀಯಾಗಿದ್ದಳು.

14:28b.2SA.014.028 ಹೀಗೆಯೇ ಅಬ್ಷಾಲೋಮನು ಅರಸನ ಮುಖ ವನ್ನು ನೋಡದೆ ಪೂರ್ಣವಾಗಿ ಎರಡು ವರುಷ ಯೆರೂಸಲೇಮಿನಲ್ಲಿ ವಾಸವಾಗಿದ್ದನು.

14:29b.2SA.014.029 ಆದದರಿಂದ ಅಬ್ಷಾಲೋಮನು ಅರಸನ ಬಳಿಗೆ ಕಳುಹಿಸುವದಕ್ಕಾಗಿ ಯೋವಾಬನನ್ನು ಕರೇಕಳುಹಿಸಿದನು. ಆದರೆ ಅವನು ಅವನ ಬಳಿಗೆ ಬರಲ್ಲೊಲ್ಲದೆ ಹೋದನು. ಎರಡನೇ ಸಾರಿ ಅವನನ್ನು ಕರೇಕಳುಹಿಸಿದನು; ಮತ್ತೂ ಅವನು ಬರಲ್ಲೊಲ್ಲದೆ ಹೋದನು.

14:30b.2SA.014.030 ಆದದರಿಂದ ಅವನು ತನ್ನ ಸೇವಕರಿಗೆ--ನೋಡಿರಿ, ನನ್ನ ಹೊಲಕ್ಕೆ ಸವಿಾಪ ವಾಗಿ ಯೋವಾಬನ ಹೊಲವಿದೆ; ಅದರಲ್ಲಿ ಜವೆ ಗೋಧಿ ಅದೆ; ನೀವು ಹೋಗಿ ಅದನ್ನು ಬೆಂಕಿಯಿಂದ ಸುಟ್ಟುಬಿಡಿರಿ ಅಂದನು. ಹಾಗೆಯೇ ಅಬ್ಷಾಲೋಮನ ಸೇವಕರು ಆ ಹೊಲಕ್ಕೆ ಬೆಂಕಿಯನ್ನು ಹಚ್ಚಿದರು.

14:31b.2SA.014.031 ಆಗ ಯೋವಾಬನು ಎದ್ದು ಅಬ್ಷಾಲೋಮನ ಮನೆಗೆ ಬಂದು ಅವನಿಗೆ--ನನ್ನ ಹೊಲವನ್ನು ನಿನ್ನ ಸೇವಕರು ಬೆಂಕಿಯಿಂದ ಸುಟ್ಟುಬಿಟ್ಟದ್ದೇನು ಎಂದು ಕೇಳಿದನು.

14:32b.2SA.014.032 ಅಬ್ಷಾಲೋಮನು ಯೋವಾಬನಿಗೆ--ಇಗೋ, ನಾನು ಗೆಷೂರಿನಿಂದ ಯಾಕೆ ಬಂದೆನೆಂದು ಅರಸನಿಗೆ ಹೇಳುವದಕ್ಕೆ ನಿನ್ನನ್ನು ಕಳುಹಿಸುವ ಹಾಗೆ ಇಲ್ಲಿಗೆ ಬಾ ಎಂದು ನಿನ್ನನ್ನು ಕರೇಕಳುಹಿಸಿದೆನು. ನಾನು ಇನ್ನೂ ಅಲ್ಲಿಯೇ ಇದ್ದಿದ್ದರೆ ನನಗೆ ಉತ್ತಮವಾಗಿತ್ತು. ಈಗ ನಾನು ಅರಸನ ಮುಖವನ್ನು ನೋಡಬೇಕು; ನನ್ನಲ್ಲಿ ಅಕ್ರಮ ಇದ್ದರೆ ಅವನು ನನ್ನನ್ನು ಕೊಂದುಹಾಕಲಿ ಅಂದನು.ಹಾಗೆಯೇ ಯೋವಾಬನು ಅರಸನ ಬಳಿಗೆ ಹೋಗಿ ತಿಳಿಸಿದ್ದರಿಂದ ಅರಸನು ಅಬ್ಷಾ ಲೋಮನನ್ನು ಕರೆಸಿದನು. ಆಗ ಅವನು ಅರಸನ ಬಳಿಗೆ ಬಂದು ಸಾಷ್ಟಾಂಗನಮಸ್ಕಾರ ಮಾಡಿದನು. ಆಗ ಅರಸನು ಅಬ್ಷಾಲೋಮನನ್ನು ಮುದ್ದಿಟ್ಟನು.

14:33b.2SA.014.033 ಹಾಗೆಯೇ ಯೋವಾಬನು ಅರಸನ ಬಳಿಗೆ ಹೋಗಿ ತಿಳಿಸಿದ್ದರಿಂದ ಅರಸನು ಅಬ್ಷಾ ಲೋಮನನ್ನು ಕರೆಸಿದನು. ಆಗ ಅವನು ಅರಸನ ಬಳಿಗೆ ಬಂದು ಸಾಷ್ಟಾಂಗನಮಸ್ಕಾರ ಮಾಡಿದನು. ಆಗ ಅರಸನು ಅಬ್ಷಾಲೋಮನನ್ನು ಮುದ್ದಿಟ್ಟನು.

15

15:1b.2SA.015.001 ತರುವಾಯ ಅಬ್ಷಾಲೋಮನು ತನ ಗೋಸ್ಕರ ರಥಗಳನ್ನೂ ಕುದುರೆಗಳನ್ನೂ ತನ್ನ ಮುಂದೆ ಓಡುವದಕ್ಕೆ ಐವತ್ತು ಮಂದಿಯನ್ನೂ ಸಿದ್ಧಮಾಡಿಕೊಂಡನು.

15:2b.2SA.015.002 ಇದಲ್ಲದೆ ಅಬ್ಷಾಲೋಮನು ಬೆಳಿಗ್ಗೆ ಎದ್ದು ಬಾಗಲ ಬಳಿಯಲ್ಲಿ ನಿಂತುಕೊಂಡು ವ್ಯಾಜ್ಯ ಉಂಟಾದವನು ಯಾವನಾದರೂ ನ್ಯಾಯ ಕ್ಕೋಸ್ಕರ ಅರಸನ ಬಳಿಗೆ ಬರುವವನಾಗಿದ್ದರೆ ಅವನನ್ನು ಕರೆದು--ನೀನು ಯಾವ ಪಟ್ಟಣದವನೆಂದು ಕೇಳು ವನು.

15:3b.2SA.015.003 ಅದಕ್ಕವನು--ನಿನ್ನ ಸೇವಕನು ಇಸ್ರಾಯೇಲ್‌ ಗೋತ್ರಗಳಲ್ಲಿ ಒಬ್ಬನೆಂದು ಹೇಳಿದರೆ ಅಬ್ಷಾಲೋ ಮನು ಅವನಿಗೆ--ನೋಡು, ನಿನ್ನ ಕಾರ್ಯಗಳು ಒಳ್ಳೆಯವೂ ಯುಕ್ತವೂ ಆದವುಗಳು; ಆದರೆ ಅರಸನ ಬಳಿಯಲ್ಲಿ ನಿನ್ನನ್ನು ವಿಚಾರಿಸುವದಕ್ಕೆ ಯಾವನೂ ಇಲ್ಲ.

15:4b.2SA.015.004 ಇದಲ್ಲದೆ ಅಬ್ಷಾಲೋಮನು--ನಾನು ದೇಶದ ಮೇಲೆ ನ್ಯಾಯಾಧಿಪತಿಯಾಗಿ ಮಾಡಲ್ಪಟ್ಟಿದ್ದರೆ ಎಷ್ಟೋ ಒಳ್ಳೆಯದು; ಆಗ ವ್ಯಾಜ್ಯವಾದರೂ ನ್ಯಾಯವಿಚಾರಣೆ ಯಾದರೂ ಇದ್ದ ಪ್ರತಿ ಮನುಷ್ಯನು ನನ್ನ ಬಳಿಗೆ ಬಂದರೆ ನಾನು ಅವನಿಗೆ ನೀತಿಯಿಂದ ನ್ಯಾಯ ತೀರಿಸುವೆನು ಅನ್ನುವನು.

15:5b.2SA.015.005 ಯಾವನಾದರೂ ತನಗೆ ವಂದಿಸುವದಕ್ಕೆ ತನ್ನ ಬಳಿಗೆ ಬಂದರೆ ತನ್ನ ಕೈಯನ್ನು ಚಾಚಿ ಅವನನ್ನು ಹಿಡಿದು ಮುದ್ದಿಟ್ಟುಕೊಳ್ಳುತ್ತಿದ್ದನು.

15:6b.2SA.015.006 ಈ ಪ್ರಕಾರ ಅಬ್ಷಾಲೋಮನು ನ್ಯಾಯಕ್ಕೋಸ್ಕರ ಅರಸನ ಬಳಿಗೆ ಬರುವ ಇಸ್ರಾಯೇಲ್ಯರೆಲ್ಲರಿಗೆ ಮಾಡಿ ದನು. ಈ ರೀತಿಯಲ್ಲಿ ಅಬ್ಷಾಲೋಮನು ಇಸ್ರಾ ಯೇಲ್ಯರಿಗೆ ಮಾಡಿದನು. ಹೀಗೆ ಅಬ್ಷಾಲೋಮನು ಇಸ್ರಾಯೇಲ್ಯರ ಹೃದಯಗಳನ್ನು ಕದ್ದುಕೊಂಡನು.

15:7b.2SA.015.007 ನಾಲ್ಕು ವರುಷಗಳಾದ ತರುವಾಯ ಅಬ್ಷಾಲೋ ಮನು ಅರಸನಿಗೆ--ನಾನು ಕರ್ತನಿಗೆ ಮಾಡಿಕೊಂಡಿದ್ದ ನನ್ನ ಪ್ರಮಾಣವನ್ನು ಹೆಬ್ರೋನಿನಲ್ಲಿ ಸಲ್ಲಿಸಲು ಹೋಗುವದಕ್ಕೆ ಅಪ್ಪಣೆಕೊಡಬೇಕು.

15:8b.2SA.015.008 ಕರ್ತನು ನನ್ನನ್ನು ಯೆರೂಸಲೇಮಿಗೆ ತಿರಿಗಿ ನಿಜವಾಗಿಯೂ ಬರಮಾಡಿದರೆ ನಾನು ಕರ್ತನನ್ನು ಸೇವಿಸುವೆನೆಂದು ನಿನ್ನ ಸೇವಕನು ಅರಾಮ್ಯ ದೇಶದ ಗೆಷೂರಿನಲ್ಲಿ ವಾಸಿಸಿರುವಾಗ ಪ್ರಮಾಣಮಾಡಿಕೊಂಡಿದ್ದೆನು ಅಂದನು.

15:9b.2SA.015.009 ಅರಸನು ಅವನಿಗೆ--ಸಮಾಧಾನವಾಗಿ ಹೋಗು ಅಂದನು. ಆಗ ಅವನು ಎದ್ದು ಹೆಬ್ರೋನಿಗೆ ಹೋದನು.

15:10b.2SA.015.010 ಆದರೆ ಅಬ್ಷಾಲೋಮನು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಗೆ ಪಾಳತಿಗಾರರನ್ನು ಕಳುಹಿಸಿ ಅವರಿಗೆ--ನೀವು ತುತೂರಿಯ ಶಬ್ದ ಕೇಳಿದಾಗ ಅಬ್ಷಾಲೋಮನು ಹೆಬ್ರೋನಿನಲ್ಲಿ ಆಳುತ್ತಾನೆಂದು ಹೇಳಿರಿ ಅಂದನು.

15:11b.2SA.015.011 ಅಬ್ಷಾಲೋಮನ ಸಂಗಡ ಯೆರೂಸಲೇಮಿನಿಂದ ಕರೆಯಲ್ಪಟ್ಟ ಇನ್ನೂರು ಮಂದಿ ಜನರು ಹೋದರು. ಆದರೆ ಅವರು ನಿರ್ವಂಚನೆ ಯುಳ್ಳವರಾಗಿ ಏನೂ ತಿಳಿಯದೆ ಇದ್ದರು.

15:12b.2SA.015.012 ಅಬ್ಷಾ ಲೋಮನು ಬಲಿಗಳನ್ನು ಅರ್ಪಿಸುತ್ತಿರುವಾಗ ದಾವೀ ದನ ಆಲೋಚನಾ ಕರ್ತನಾಗಿರುವ ಗೀಲೋವಿಯ ನಾದ ಅಹೀತೋಫೆಲನನ್ನು ಗೀಲೋವೆಂಬ ಅವನ ಪಟ್ಟಣದಿಂದ ಕರೇಕಳುಹಿಸಿದನು. ಅಬ್ಷಾಲೋಮನ ಸಂಗಡ ಕೂಡುವ ಜನರು ಆಗಾಗ್ಗೆ ಹೆಚ್ಚಿದ್ದರಿಂದ ಒಳಸಂಚಿನ ಗುಂಪು ಬಲವಾಯಿತು.

15:13b.2SA.015.013 ದಾವೀದನ ಬಳಿಗೆ ಒಬ್ಬ ದೂತನು ಬಂದು --ಇಸ್ರಾಯೇಲ್‌ ಜನರ ಹೃದಯಗಳು ಅಬ್ಷಾ ಲೋಮನ ಕಡೆಗಾದವು ಅಂದನು.

15:14b.2SA.015.014 ಆಗ ದಾವೀದನು ಯೆರೂಸಲೇಮಿನಲ್ಲಿ ತನ್ನ ಹತ್ತಿರ ಇರುವ ತನ್ನ ಎಲ್ಲಾ ಸೇವಕರಿಗೆ--ಏಳಿರಿ, ನಾವು ಓಡಿ ಹೋಗೋಣ; ಇಲ್ಲದಿದ್ದರೆ ಅಬ್ಷಾಲೋಮನ ಕೈ ಯಿಂದ ತಪ್ಪಿಸಿಕೊಂಡು ಹೋಗಲಾರೆವು; ಅವನು ಪಕ್ಕನೆ ನಮ್ಮನ್ನು ಹಿಡಿದು ನಮ್ಮ ಮೇಲೆ ಕೇಡನ್ನು ಬರಮಾಡಿ ಪಟ್ಟಣವನ್ನು ಕತ್ತಿಯಿಂದ ಹೊಡೆಯದ ಹಾಗೆ ಹೊರಟು ಹೋಗುವದಕ್ಕೆ ತ್ವರೆಮಾಡಿರಿ ಅಂದನು.

15:15b.2SA.015.015 ಆಗ ಅರಸನ ಸೇವಕರು ಅರಸನಿಗೆಇಗೋ, ಅರಸನಾದ ನಮ್ಮ ಒಡೆಯನು ನಮಗೆ ಏನೇನು ಆಜ್ಞಾಪಿಸುವನೋ ಅದನ್ನು ಮಾಡುವದಕ್ಕೆ ನಿನ್ನ ಸೇವಕರು ಸಿದ್ಧರಾಗಿದ್ದೇವೆ ಅಂದರು.

15:16b.2SA.015.016 ಅರಸನು ಮನೆಗೆ ಕಾವಲಿರುವಂತೆ ಉಪಪತ್ನಿಗಳಾದ ಹತ್ತು ಮಂದಿ ಸ್ತ್ರೀಯರನ್ನು ಬಿಟ್ಟು ಅವನೂ ಅವನ ಮನೆ ಯವರೆಲ್ಲರೂ ಅವನ ಹಿಂದೆ ಹೊರಟು ಹೋದರು.

15:17b.2SA.015.017 ಅರಸನೂ ಅವನ ಹಿಂದೆ ಎಲ್ಲಾ ಜನರೂ ಹೊರಟು ಹೋಗಿ ದೂರವಾದ ಸ್ಥಳದಲ್ಲಿ ನಿಂತರು.

15:18b.2SA.015.018 ಅವನ ಎಲ್ಲಾ ಸೇವಕರೂ ಕೆರೇತ್ಯರೂ ಪೆಲೇತ್ಯರೂ ಅವನ ಹಿಂದೆ ಗತ್‌ ಊರಿನಿಂದ ಅವನ ಸಂಗಡ ಬಂದ ಗಿತ್ತಿಯರಾದ ಆರುನೂರು ಮಂದಿಯೂ ಅರಸನ ಮುಂದೆ ನಡೆದರು.

15:19b.2SA.015.019 ಆಗ ಅರಸನು ಗಿತ್ತೀಯನಾದ ಇತ್ತೈಯನ್ನು ನೋಡಿ--ನೀನು ನಮ್ಮ ಸಂಗಡ ಬರುವದು ಯಾಕೆ? ನಿನ್ನ ಸ್ಥಳಕ್ಕೆ ಹಿಂದಿರುಗಿ ಹೋಗಿ ಅರಸನ ಸಂಗಡ ಇರು. ಯಾಕಂದರೆ ನೀನು ಸೆರೆಹಿಡಿಯಲ್ಪಟ್ಟವನಾದ ಅನ್ಯದೇಶದವನು.

15:20b.2SA.015.020 ನೀನು ನಿನ್ನೆ ಬಂದವನಾದದ ರಿಂದ ನಮ್ಮ ಸಂಗಡ ಹೋಗುವದಕ್ಕೆ ನಾನು ನಿನ್ನನ್ನು ತಿರುಗಾಡಿಸುವದು ಯಾಕೆ? ನಾನು ಎಲ್ಲಿಗೆ ಹೋಗ ಬೇಕಾದರೂ ಅಲ್ಲಿಗೆ ಹೋಗುವೆನು. ನಿನ್ನ ಸಹೋದರ ರನ್ನು ಕರಕೊಂಡು ಹಿಂದಕ್ಕೆ ಹೋಗು; ಕೃಪೆಯೂ ಸತ್ಯವೂ ನಿನ್ನ ಸಂಗಡ ಇರಲಿ ಅಂದನು.

15:21b.2SA.015.021 ಆದರೆ ಇತ್ತೈಯು ಅರಸನಿಗೆ ಪ್ರತ್ಯುತ್ತರವಾಗಿ--ಕರ್ತನ ಜೀವ ದಾಣೆ, ಅರಸನಾದ ನನ್ನ ಒಡೆಯನ ಜೀವದಾಣೆ--ಸಾವಾದರೂ ಬದುಕುವದಾದರೂ ಅರಸನಾದ ನನ್ನ ಒಡೆಯನು ಎಲ್ಲಿ ಇರುವನೋ ನಿಶ್ಚಯವಾಗಿ ಅಲ್ಲಿ ನಿನ್ನ ಸೇವಕನು ಇರುವನು ಅಂದನು.

15:22b.2SA.015.022 ಆಗ ದಾವೀದನು ಅವನಿಗೆ--ನೀನು ಹೋಗಿ ದಾಟು ಅಂದನು. ಆದದರಿಂದ ಗಿತ್ತೀಯನಾದ ಇತ್ತೈ ಅವನ ಎಲ್ಲಾ ಜನರೂ ಅವನ ಸಂಗಡ ಇರುವ ಎಲ್ಲಾ ಚಿಕ್ಕ ವರು ಕೂಡ ದಾಟಿಹೋದರು. ಜನರೆಲ್ಲಾ ದಾಟಿ ಹೋಗುವಾಗ ದೇಶದವರೆಲ್ಲಾ ಬಹಳವಾಗಿ ಅತ್ತರು.

15:23b.2SA.015.023 ಅರಸನು ಕಿದ್ರೋನ್‌ ಹಳ್ಳವನ್ನು ದಾಟಿದನು; ಹಾಗೆಯೇ ಅವನ ಜನರೆಲ್ಲರೂ ದಾಟಿ ಅರಣ್ಯದ ಮಾರ್ಗವಾಗಿ ನಡೆದು ಹೋದರು.

15:24b.2SA.015.024 ಇಗೋ, ಚಾದೋಕನೂ ಅವನ ಸಂಗಡ ಇರುವ ಎಲ್ಲಾ ಲೇವಿಯರೂ ದೇವರ ಒಡಂಬಡಿಕೆಯ ಮಂಜೂ ಷವನ್ನು ಹೊತ್ತುಕೊಂಡು ಬಂದು ಇಳಿಸಿದರು. ಆದರೆ ಎಬ್ಯಾತಾರನು ಜನರೆಲ್ಲರು ಪಟ್ಟಣದಿಂದ ದಾಟಿ ಹೋಗುವ ವರೆಗೆ ಮುಂದೆ ನಡೆಯುತ್ತಿದ್ದನು.

15:25b.2SA.015.025 ಆಗ ಅರಸನು ಚಾದೋಕನಿಗೆ--ದೇವರ ಮಂಜೂಷವನ್ನು ಪಟ್ಟಣಕ್ಕೆ ತಿರಿಗಿ ತಕ್ಕೊಂಡು ಹೋಗು. ಕರ್ತನ ದೃಷ್ಟಿಯಲ್ಲಿ ಮುಂದೆ ನನಗೆ ಕೃಪೆ ದೊರಕಿದರೆ ಆತನು ನನ್ನನ್ನು ತಿರಿಗಿ ಬರಮಾಡಿ ಅದನ್ನೂ ಅದರ ವಾಸಸ್ಥಳವನ್ನೂ ನನಗೆ ತೋರಿಸುವನು.

15:26b.2SA.015.026 ಒಂದು ವೇಳೆ ಆತನು--ನಿನ್ನಲ್ಲಿ ನನಗೆ ಇಷ್ಟವಿಲ್ಲವೆಂದು ಹೇಳಿ ದರೆ ಇಗೋ, ಆತನು ತನ್ನ ದೃಷ್ಟಿಗೆ ಯುಕ್ತವಾದ ಹಾಗೆ ನನಗೆ ಮಾಡಲಿ ಅಂದನು.

15:27b.2SA.015.027 ಅರಸನು ಯಾಜಕ ನಾದ ಚಾದೋಕನಿಗೆ--ನೀನು ದರ್ಶಿಯಲ್ಲವೇ? ನೀನು ಸಮಾಧಾನದಿಂದ ಪಟ್ಟಣಕ್ಕೆ ತಿರಿಗಿ ಹೋಗು; ಇದಲ್ಲದೆ ನಿನ್ನ ಇಬ್ಬರು ಮಕ್ಕಳಾದ ಅಹೀಮಾಚನೂ ಎಬ್ಯಾತಾರನ ಮಗನಾದ ಯೋನಾತಾನನೂ ನಿನ್ನ ಸಂಗಡ ಹೋಗಲಿ.

15:28b.2SA.015.028 ನೋಡು, ನನಗೆ ತಿಳಿಸುವದಕ್ಕೆ ನಿಮ್ಮ ಬಳಿಯಿಂದ ವರ್ತಮಾನ ಬರುವ ವರೆಗೂ ನಾನು ಅರಣ್ಯದ ಬೈಲಲ್ಲಿ ಇರುವೆನು ಅಂದನು.

15:29b.2SA.015.029 ಹಾಗೆಯೇ ಚಾದೋಕನೂ ಎಬ್ಯಾತಾರನೂ ದೇವರ ಮಂಜೂಷವನ್ನು ತಿರಿಗಿ ಯೆರೂಸಲೇಮಿಗೆ ತಕ್ಕೊಂಡು ಹೋಗಿ ಅಲ್ಲಿದ್ದರು.

15:30b.2SA.015.030 ದಾವೀದನು ಅಳುತ್ತಾ ತನ್ನ ತಲೆಯನ್ನು ಮುಚ್ಚಿ ಕೊಂಡು ಬರಿಗಾಲಾಗಿ ಎಣ್ಣೆ ಮರಗಳ ಗುಡ್ಡವನ್ನು ಏರಿದನು; ಅವನ ಸಂಗಡ ಇರುವ ಎಲ್ಲಾ ಜನರೂ ತಮ್ಮ ತಮ್ಮ ತಲೆಗಳನ್ನು ಮುಚ್ಚಿಕೊಂಡು ಅಳುತ್ತಾ ಮೇಲಕ್ಕೆರಿದರು.

15:31b.2SA.015.031 ಅಹೀತೋಫೆಲನು ಅಬ್ಷಾಲೋ ಮನ ಬಳಿಯಲ್ಲಿ ಒಳಸಂಚಿನವರ ಸಂಗಡ ಇದ್ದಾ ನೆಂದು ದಾವೀದನಿಗೆ ತಿಳಿಸಲ್ಪಟ್ಟಾಗ ದಾವೀದನು--ಕರ್ತನೇ, ಅಹೀತೋಫೆಲನ ಆಲೋಚನೆಯನ್ನು ಹುಚ್ಚುತನವಾಗ ಮಾಡು ಅಂದನು.

15:32b.2SA.015.032 ದಾವೀದನು ಪರ್ವತದ ತುದಿಗೆ ಬಂದು ಅಲ್ಲಿ ದೇವರನ್ನು ಆರಾಧಿಸಿ ದಾಗ ಏನಾಯಿತಂದರೆ ಇಗೋ, ಅರ್ಕೀಯನಾದ ಹೂಷೈ ತನ್ನ ಅಂಗಿಯನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣು ಹೊಯ್ದುಕೊಂಡು ಅವನನ್ನು ಎದುರುಗೊಳ್ಳಲು ಬಂದನು.

15:33b.2SA.015.033 ಆಗ ದಾವೀದನು ಅವನಿಗೆ--ನೀನು ನನ್ನ ಸಂಗಡ ಬಂದರೆ ನನಗೆ ಭಾರವಾಗಿರುವಿ; ನೀನು ಪಟ್ಟಣಕ್ಕೆ ತಿರಿಗಿ ಹೋಗಿ ಅಬ್ಷಾಲೋಮನಿಗೆ--ಅರಸನೇ, ನಾನು ನಿನ್ನ ಸೇವಕ ನಾಗಿರುವೆನು.

15:34b.2SA.015.034 ನಾನು ಇಂದಿನ ವರೆಗೂ ಹೇಗೆ ನಿನ್ನ ತಂದೆಗೆ ಸೇವಕನಾಗಿದ್ದೆನೋ ಹಾಗೆಯೇ ಈಗ ನಿನ್ನ ಸೇವಕನಾಗಿರುವೆನು ಎಂದು ಹೇಳುವುದಾದರೆ ನೀನು ನನಗೋಸ್ಕರ ಅಹೀತೋಫೆಲನ ಆಲೋಚನೆ ಯನ್ನು ವ್ಯರ್ಥಮಾಡಬಹುದು.

15:35b.2SA.015.035 ಅಲ್ಲಿ ಯಾಜಕ ರಾದ ಚಾದೋಕನೂ ಎಬ್ಯಾತಾರನೂ ನಿನ್ನ ಬಳಿಯಲ್ಲಿ ಲ್ಲವೋ? ಆದದರಿಂದ ನೀನು ಅರಸನ ಮನೆಯಲ್ಲಿ ಯಾವ ವರ್ತಮಾನವನ್ನು ಕೇಳುತ್ತೀಯೋ ಅದನ್ನು ಯಾಜಕರಾದ ಚಾದೋಕನಿಗೂ ಎಬ್ಯಾತಾರನಿಗೂ ತಿಳಿಸು.

15:36b.2SA.015.036 ಇಗೋ, ಅಲ್ಲಿ ಅವರ ಸಂಗಡ ಅವರ ಇಬ್ಬರು ಮಕ್ಕಳು ಇದ್ದಾರೆ: ಚಾದೋಕನ ಮಗನಾದ ಅಹೀಮಾಚನೂ ಎಬ್ಯಾತಾರನ ಮಗನಾದ ಯೋನಾ ತಾನನೂ. ನೀವು ಕೇಳಿದ ವರ್ತಮಾನವನ್ನೆಲ್ಲಾ ಅವರ ಮೂಲಕ ನನಗೆ ಹೇಳಿ ಕಳುಹಿಸಬೇಕು ಅಂದನು.ಹಾಗೆಯೇ ದಾವೀದನ ಸ್ನೇಹಿತನಾದ ಹೂಷೈ ಪಟ್ಟಣಕ್ಕೆ ಬಂದನು; ಅಬ್ಷಾಲೋಮನು ಯೆರೂಸಲೇಮಿಗೆ ಬಂದನು.

15:37b.2SA.015.037 ಹಾಗೆಯೇ ದಾವೀದನ ಸ್ನೇಹಿತನಾದ ಹೂಷೈ ಪಟ್ಟಣಕ್ಕೆ ಬಂದನು; ಅಬ್ಷಾಲೋಮನು ಯೆರೂಸಲೇಮಿಗೆ ಬಂದನು.

16

16:1b.2SA.016.001 ದಾವೀದನು ಬೆಟ್ಟದ ತುದಿಯಿಂದ ಸ್ವಲ್ಪ ದೂರಹೋದಾಗ ಇಗೋ, ಮೆಫೀಬೋ ಶೆತನ ಸೇವಕನಾದ ಚೀಬನು ತಡಿಹಾಕಿದ ಎರಡು ಕತ್ತೆಗಳನ್ನು ಹೊಡಕೊಂಡು ಬಂದು ಅವನನ್ನು ಎದುರು ಗೊಂಡನು; ಅವುಗಳ ಮೇಲೆ ಇನ್ನೂರು ರೊಟ್ಟಿ ಗಳೂ ಒಣಗಿದ ನೂರು ದ್ರಾಕ್ಷೇ ಗೊಂಚಲುಗಳೂ ವಸಂತಕಾಲದ ನೂರು ಹಣ್ಣುಗಳೂ ಒಂದು ಬುದ್ದಲಿ ದ್ರಾಕ್ಷಾರಸವೂ ಇದ್ದವು.

16:2b.2SA.016.002 ಅರಸನು ಚೀಬನಿಗೆ--ಇವು ಯಾಕೆ ಅಂದನು. ಅದಕ್ಕೆ ಚೀಬನು--ಕತ್ತೆಗಳು ಅರಸನ ಮನೆಯವರು ಹತ್ತುವದಕ್ಕೂ ಆ ರೊಟ್ಟಿಗಳೂ ವಸಂತಕಾಲದ ಫಲಗಳೂ ಯೌವನಸ್ಥರು ತಿನ್ನುವ ದಕ್ಕೂ ದ್ರಾಕ್ಷಾರಸವು ಅರಣ್ಯದಲ್ಲಿ ದಣಿದವರು ಕುಡಿಯುವದಕ್ಕೂ ಅಂದನು.

16:3b.2SA.016.003 ಆಗ ಅರಸನು ಅವ ನನ್ನು--ನಿನ್ನ ಯಜಮಾನನ ಕುಮಾರನು ಎಲ್ಲಿದ್ದಾ ನೆಂದು ಕೇಳಿದನು. ಚೀಬನು ಅರಸನಿಗೆ--ಇಗೋ, ಅವನು ಯೆರೂಸಲೇಮಿನಲ್ಲಿದ್ದಾನೆ. ಯಾಕಂದರೆ--ಈ ಹೊತ್ತು ಇಸ್ರಾಯೇಲಿನ ಮನೆಯವರು ನನ್ನ ತಂದೆಯ ರಾಜ್ಯವನ್ನು ನನಗೆ ತಿರಿಗಿಕೊಡುವರೆಂದು ಅಂದನು.

16:4b.2SA.016.004 ಆಗ ಅರಸನು ಚೀಬನಿಗೆ--ಇಗೋ, ಮೆಫೀಬೋಶೆತನಿಗೆ ಉಂಟಾದದ್ದೆಲ್ಲಾ ನಿನ್ನದಾಯಿತು ಅಂದನು. ಅದಕ್ಕೆ ಚೀಬನು--ಅರಸನಾದ ನನ್ನ ಒಡೆ ಯನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಲಿ ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.

16:5b.2SA.016.005 ಅರಸನಾದ ದಾವೀದನು ಬಹುರೀಮಿನ ವರೆಗೂ ಬಂದಾಗ ಇಗೋ, ಸೌಲನ ಗೋತ್ರದವನಾದಂಥ ಗೇರನ ಮಗನಾದ ಶಿಮ್ಮಿಯೆಂಬ ಹೆಸರುಳ್ಳ ಒಬ್ಬ ಮನುಷ್ಯನು ಅಲ್ಲಿಂದ ಹೊರಟು ದೂಷಿಸುತ್ತಾ ನಡೆದು ಬಂದನು.

16:6b.2SA.016.006 ಎಲ್ಲಾ ಜನರೂ ಎಲ್ಲಾ ಪರಾಕ್ರಮಶಾಲಿ ಗಳೂ ದಾವೀದನ ಬಲ ಮತ್ತು ಎಡ ಪಾರ್ಶ್ವಗಳಲ್ಲಿ ರುವಾಗ ಅವನು ಅರಸನಾದ ದಾವೀದನ ಮೇಲೆಯೂ ಅವನ ಎಲ್ಲಾ ಊಳಿಗದವರ ಮೇಲೆಯೂ ಕಲ್ಲುಗಳನ್ನು ಎಸೆದನು.

16:7b.2SA.016.007 ಶಿಮ್ಮಿ ಅವನನ್ನು ದೂಷಿಸುತ್ತಾ--ರಕ್ತದ ಮನುಷ್ಯನೇ, ಬೆಲಿಯಾಳನ ಮನುಷ್ಯನೇ, ಹೊರಟು ಬಾ, ಹೊರಟು ಬಾ.

16:8b.2SA.016.008 ಕರ್ತನು ಸೌಲನ ಮನೆಯವರ ರಕ್ತವನ್ನು ಸೌಲನಿಗೆ ಪ್ರತಿಯಾಗಿ ಅರಸನಾದ ನಿನ್ನ ಮೇಲೆ ತಿರಿಗಿ ಬರಮಾಡಿ ರಾಜ್ಯವನ್ನು ನಿನ್ನ ಮಗನಾದ ಅಬ್ಷಾಲೋಮನ ಕೈಯಲ್ಲಿ ಒಪ್ಪಿಸಿಕೊಟ್ಟನು; ನೀನು ರಕ್ತದ ಮನುಷ್ಯನಾದದರಿಂದ ಇಗೋ, ನಿನ್ನ ಕೇಡಿನಲ್ಲಿ ಸಿಕ್ಕಿಕೊಂಡಿ ಅಂದನು.

16:9b.2SA.016.009 ಆಗ ಚೆರೂಯಳ ಮಗನಾದ ಅಬೀಷೈಯು ಅರಸನಿಗೆ--ಈ ಸತ್ತ ನಾಯಿ, ಅರಸನಾದ ನನ್ನ ಒಡೆಯನನ್ನು ದೂಷಿಸುವದೇನು? ನಾನೇ ದಾಟಿಹೋಗಿ ಅವನ ತಲೆಯನ್ನು ತೆಗೆದುಕೊಳ್ಳಲು ಅಪ್ಪಣೆಯಾಗಲಿ ಅಂದನು.

16:10b.2SA.016.010 ಆದರೆ ಅರಸನು--ಚೆರೂಯಳ ಮಕ್ಕಳೇ, ನನಗೂ ನಿಮಗೂ ಏನು? ಅವನು ನನ್ನನ್ನು ದೂಷಿಸಲಿ; ಯಾಕಂದರೆ--ದಾವೀದ ನನ್ನು ದೂಷಿಸು ಎಂದು ಕರ್ತನು ಅವನಿಗೆ ಹೇಳಿದ್ದಾನೆ; ಹಾಗಾದರೆ ಯಾಕೆ ಹೀಗೆ ಮಾಡುತ್ತೀ ಎಂದು ಹೇಳುವ ವನಾರು ಅಂದನು.

16:11b.2SA.016.011 ದಾವೀದನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ--ಇಗೋ, ನನ್ನ ಹೊಟ್ಟೆಯಲ್ಲಿ ಹುಟ್ಟಿದ ನನ್ನ ಮಗನು ನನ್ನ ಪ್ರಾಣವನ್ನು ಹುಡುಕಿದರೆ ಎಷ್ಟೋ ಅಧಿಕವಾಗಿ ಈ ಬೆನ್ಯಾವಿಾನ್ಯನಾದವನು ಹೀಗೆ ಮಾಡುವದು ಯಾವ ದೊಡ್ಡಮಾತು? ಅವ ನನ್ನು ಬಿಟ್ಟುಬಿಡಿರಿ; ಅವನು ದೂಷಿಸಲಿ; ಯಾಕಂದರೆ ಕರ್ತನು ಅವನಿಗೆ ಹಾಗೆಯೇ ಹೇಳಿದ್ದಾನೆ.

16:12b.2SA.016.012 ಒಂದು ವೇಳೆ ಕರ್ತನು ನನ್ನ ಶ್ರಮೆಯನ್ನು ನೋಡಿ ಈ ದಿನ ದಲ್ಲಿ ಅವನು ಮಾಡಿದ ದೂಷಣೆಗೆ ಪ್ರತಿಯಾಗಿ ನನಗೆ ಒಳ್ಳೆಯದನ್ನು ಮಾಡಬಹುದು ಅಂದನು.

16:13b.2SA.016.013 ದಾವೀದನೂ ಅವನ ಸೇವಕರೂ ದಾರಿ ಹಿಡಿದು ಹೋಗುವಾಗ ಶಿಮ್ಮಿ ಬೆಟ್ಟದ ಪಾರ್ಶ್ವವಾಗಿ ಬಂದು ಅವನಿಗೆದುರಾಗಿ ನಡೆದು ದೂಷಿಸಿ ಅವನ ಕಡೆಗೆ ಮಣ್ಣನ್ನು ತೂರಿ ಕಲ್ಲುಗಳನ್ನು ಎಸೆದನು.

16:14b.2SA.016.014 ಅರಸನೂ ಅವನ ಸಂಗಡಲಿರುವ ಎಲ್ಲಾ ಜನರೂ ನಡೆದು ದಣಿದದ್ದರಿಂದ ಅಲ್ಲಿ ವಿಶ್ರಮಿಸಿಕೊಂಡರು.

16:15b.2SA.016.015 ಅಬ್ಷಾಲೋಮನೂ ಎಲ್ಲಾ ಇಸ್ರಾಯೇಲ್‌ ಜನರೂ ಅವನ ಸಂಗಡ ಅಹೀತೋಫೆಲನೂ ಯೆರೂ ಸಲೇಮಿಗೆ ಬಂದರು

16:16b.2SA.016.016 ಅರ್ಕೀಯನಾದ ಹೂಷೈ ಯೆಂಬ ದಾವೀದನ ಸ್ನೇಹಿತನು ಅಬ್ಷಾಲೋಮನ ಬಳಿಗೆ ಬಂದು--ಅರಸನು ಬಾಳಲಿ, ಅರಸನು ಬಾಳಲಿ ಅಂದನು.

16:17b.2SA.016.017 ಅಬ್ಷಾಲೋಮನು ಅವನಿಗೆ--ಸ್ನೇಹಿತನ ಮೇಲೆ ನಿನಗಿದ್ದ ಪ್ರೀತಿ ಇಷ್ಟೇಯೇನು? ನೀನು ನಿನ್ನ ಸ್ನೇಹಿತನೊಡನೆ ಯಾಕೆ ಹೋಗಲಿಲ್ಲ ಅಂದನು.

16:18b.2SA.016.018 ಹೂಷೈ ಅಬ್ಷಾಲೋಮನಿಗೆ--ಹಾಗಲ್ಲ, ಆದರೆ ಕರ್ತನೂ ಈ ಜನವೂ ಇಸ್ರಾಯೇಲಿನ ಎಲ್ಲಾ ಜನರೂ ಯಾರನ್ನು ಆದುಕೊಳ್ಳುವರೋ ನಾನೂ ಅವನ ಪಕ್ಷದವನಾಗಿರುವೆನು; ನಾನು ಅವನ ಬಳಿಯಲ್ಲಿ ಇರುವೆನು.

16:19b.2SA.016.019 ಇದಲ್ಲದೆ ನಾನು ಯಾರನ್ನು ಸೇವಿಸತಕ್ಕದ್ದು? ಅವನ ಮಗನ ಸಮ್ಮುಖ ದಲ್ಲಿ ಅಲ್ಲವೇ? ನಾನು ನಿನ್ನ ತಂದೆಯ ಸಮ್ಮುಖದಲ್ಲಿ ಹೇಗೆ ಸೇವಿಸಿದೆನೋ ಹಾಗೆಯೇ ನಿನ್ನ ಸಮ್ಮುಖದಲ್ಲಿ ಇರುವೆನು ಅಂದನು.

16:20b.2SA.016.020 ಆಗ ಅಬ್ಷಾಲೋಮನು ಅಹೀತೋಫೆಲನಿಗೆ--ನಾವು ಮಾಡಬೇಕಾದದ್ದನ್ನು ನೀನು ಯೋಚನೆ ಮಾಡಿ ಹೇಳು ಅಂದನು.

16:21b.2SA.016.021 ಅಹೀತೋಫೆಲನು ಅಬ್ಷಾಲೋಮನಿಗೆ--ನಿನ್ನ ತಂದೆಯು ಮನೆಗೆ ಕಾವಲಿಟ್ಟ ಉಪಪತ್ನಿಗಳೊಡನೆ ಸಂಗಮಿಸು; ಆಗ ನಿನ್ನ ತಂದೆ ಯಿಂದ ನೀನು ಹಗೆಮಾಡಲ್ಪಟ್ಟವನೆಂದು ಎಲ್ಲಾ ಇಸ್ರಾ ಯೇಲ್ಯರು ಕೇಳಿ ನಿನ್ನ ಸಂಗಡ ಇರುವ ಎಲ್ಲಾ ಜನರ ಕೈಗಳೂ ಬಲವಾಗಿರುವವು ಅಂದನು.

16:22b.2SA.016.022 ಹಾಗೆಯೇ ಅವರು ಅಬ್ಷಾಲೋಮನಿಗೋಸ್ಕರ ಮನೆಯ ಮೇಲೆ ಡೇರೆ ಹಾಕಿದರು; ಅಲ್ಲಿ ಅಬ್ಷಾಲೋಮನು ಎಲ್ಲಾ ಇಸ್ರಾಯೇಲ್ಯರ ಕಣ್ಣುಗಳ ಮುಂದೆ ತನ್ನ ತಂದೆಯ ಉಪಪತ್ನಿಗಳನ್ನು ಕೂಡಿದನು.ಆ ದಿವಸಗಳಲ್ಲಿ ಅಹೀತೋಫೆಲನು ಆಲೋಚಿಸಿದ ಆಲೋಚನೆಯು ಒಬ್ಬನು ದೈವೋಕ್ತಿಗಳನ್ನು ವಿಚಾರಿಸುವ ಹಾಗೆ ಇತ್ತು. ಅಹೀತೋಫೆಲನ ಆಲೋಚನೆಯೆಲ್ಲಾ ದಾವೀದನಿಗೂ ಅಬ್ಷಾಲೋಮನಿಗೂ ಹಾಗೆಯೇ ಇತ್ತು.

16:23b.2SA.016.023 ಆ ದಿವಸಗಳಲ್ಲಿ ಅಹೀತೋಫೆಲನು ಆಲೋಚಿಸಿದ ಆಲೋಚನೆಯು ಒಬ್ಬನು ದೈವೋಕ್ತಿಗಳನ್ನು ವಿಚಾರಿಸುವ ಹಾಗೆ ಇತ್ತು. ಅಹೀತೋಫೆಲನ ಆಲೋಚನೆಯೆಲ್ಲಾ ದಾವೀದನಿಗೂ ಅಬ್ಷಾಲೋಮನಿಗೂ ಹಾಗೆಯೇ ಇತ್ತು.

17

17:1b.2SA.017.001 ಇದಲ್ಲದೆ ಅಹೀತೋಫೆಲನು ಅಬ್ಷಾ ಲೋಮನಿಗೆ--ಅಪ್ಪಣೆಯಾದರೆ ನಾನು ಹನ್ನೆರಡು ಸಾವಿರ ಜನರನ್ನು ಆದುಕೊಳ್ಳುವೆನು.

17:2b.2SA.017.002 ಅವನು ದಣಿದವನೂ ಧೈರ್ಯಗುಂದಿದವನೂ ಆಗಿ ರುವಾಗಲೇ ಫಕ್ಕನೆ ಅವನ ಮೇಲೆ ಬಿದ್ದು ಅವನನ್ನು ಬೆದರಿಸುವೆನು, ಅವನ ಜನರೆಲ್ಲರೂ ಓಡಿಹೋಗು ವರು.

17:3b.2SA.017.003 ಆಗ ನಾನು ಅರಸನನ್ನು ಮಾತ್ರ ಕೊಂದು ಜನರೆಲ್ಲರನ್ನು ತಿರಿಗಿ ನಿನ್ನ ಬಳಿಗೆ ತಕ್ಕೊಂಡು ಬರು ವೆನು. ನೀನು ಹುಡುಕುವವನು ಸಿಕ್ಕಿದರೆ ಜನರೆಲ್ಲರೂ ಹಿಂತಿರುಗಿದ ಹಾಗೆ ಆಗುವದು; ಜನರೆಲ್ಲರೂ ಸಮಾ ಧಾನವಾಗಿರುವರು ಅಂದನು.

17:4b.2SA.017.004 ಈ ಮಾತು ಅಬ್ಷಾಲೋಮನಿಗೂ ಇಸ್ರಾಯೇಲಿನ ಎಲ್ಲಾ ಹಿರಿಯರ ದೃಷ್ಟಿಗೂ ಸರಿಯಾಗಿತ್ತು.

17:5b.2SA.017.005 ಆದರೆ ಅಬ್ಷಾಲೋಮನು ಅರ್ಕೀಯನಾದ ಹೂಷೈಯನ್ನು ನಾವು ಕೇಳುವ ಹಾಗೆ ಅವನನ್ನು ಕರೆಯಿರಿ ಅಂದನು.

17:6b.2SA.017.006 ಹೂಷೈಯು ಅಬ್ಷಾಲೋಮನ ಬಳಿಗೆ ಬಂದಾಗ ಅಬ್ಷಾಲೋಮನು ಅವನಿಗೆ--ಅಹೀತೋಫೆಲನು ಈ ಪ್ರಕಾರ ಹೇಳಿದ್ದಾನೆ. ಅವನ ಮಾತಿನ ಪ್ರಕಾರ ಮಾಡೋಣವೋ? ಬೇಡವಾದರೆ, ನೀನು ಮಾತ ನಾಡು ಅಂದನು.

17:7b.2SA.017.007 ಆಗ ಹೂಷೈ ಅಬ್ಷಾಲೋಮ ನಿಗೆ--ಅಹೀತೋಫೆಲನು ಹೇಳಿದ ಆಲೋಚನೆಯು ಈ ವೇಳೆಗೆ ಒಳ್ಳೇದಲ್ಲ.

17:8b.2SA.017.008 ನಿನ್ನ ತಂದೆಯೂ ಅವನ ಜನರೂ ಪರಾಕ್ರಮಶಾಲಿಗಳು; ಅವರು ಅಡವಿಯಲ್ಲಿ ಮರಿಗಳನ್ನು ಕಳಕೊಂಡ ಕರಡಿಯ ಹಾಗೆ ರೋಷ ವುಳ್ಳವರಾಗಿದ್ದಾರೆಂದು ನೀನು ಬಲ್ಲೆ. ಇದಲ್ಲದೆ ನಿನ್ನ ತಂದೆಯು ಶೂರನು; ಅವನು ರಾತ್ರಿಯಲ್ಲಿ ಜನರ ಸಂಗಡ ತಂಗುವದಿಲ್ಲ.

17:9b.2SA.017.009 ಇಗೋ, ಅವನು ಈಗ ಒಂದು ಗವಿಯಲ್ಲಾದರೂ ಒಂದು ಸ್ಥಳದಲ್ಲಾದರೂ ಅಡಗಿಕೊಂಡಿರುವನು. ಮೊದಲೇ ಇವರಲ್ಲಿ ಕೆಲವರು ಸತ್ತರೆ ಅದನ್ನು ಕೇಳು ವವರು ಅಬ್ಷಾಲೋಮನನ್ನು ಹಿಂಬಾಲಿಸುವ ಜನರಲ್ಲಿ ಸಂಹಾರವಾಯಿತೆಂದು ಹೇಳುವರು.

17:10b.2SA.017.010 ಆಗ ಸಿಂಹದ ಹೃದಯವುಳ್ಳ ಪರಾಕ್ರಮಶಾಲಿಯ ಹೃದಯವೂ ಸಹ ಸಂಪೂರ್ಣ ಕರಗುವದು. ಇದಲ್ಲದೆ ನಿನ್ನ ತಂದೆಯು ಶೂರನೆಂದೂ ಅವನ ಸಂಗಡ ಇರುವವರು ಪರಾ ಕ್ರಮಶಾಲಿಗಳೆಂದೂ ಇಸ್ರಾಯೇಲ್ಯರೆಲ್ಲರು ಬಲ್ಲರು.

17:11b.2SA.017.011 ನಾನು ಹೇಳುವ ಆಲೋಚನೆ ಏನಂದರೆ, ದಾನಿ ನಿಂದ ಬೇರ್ಷೆಬದ ವರೆಗೂ ಇರುವ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಇಸ್ರಾಯೇಲ್ಯರು ನಿನ್ನ ಬಳಿಯಲ್ಲಿ ಕೂಡಿಸಲ್ಪಟ್ಟ ತರುವಾಯ ನೀನೇ ಯುದ್ಧಕ್ಕೆ ಹೋಗಬೇಕು.

17:12b.2SA.017.012 ಆಗ ನಾವು ಅವನನ್ನು ಕಂಡು ಕೊಳ್ಳುವ ಸ್ಥಳದಲ್ಲಿ ಅವನ ಮೇಲೆ ಬಂದು ಭೂಮಿಯ ಮೇಲೆ ಮಂಜು ಬೀಳುವ ಹಾಗೆ ಅವನ ಮೇಲೆ ಬೀಳುವೆವು. ಅವನೂ ಅವನ ಸಂಗಡವಿರುವ ಎಲ್ಲಾ ಜನರಲ್ಲಿ ಒಬ್ಬನಾದರೂ ಉಳಿಯುವದಿಲ್ಲ.

17:13b.2SA.017.013 ಅವನು ಒಂದು ವೇಳೆ ಒಂದು ಪಟ್ಟಣದಲ್ಲಿ ಹೊಕ್ಕರೆ ಇಸ್ರಾಯೇಲ್ಯರೆಲ್ಲರು ಆ ಪಟ್ಟಣಕ್ಕೆ ಹಗ್ಗಗಳನ್ನು ತಂದು ಹಾಕಿದ ತರುವಾಯ ನಾವು ಒಂದು ಹರಳಾದರೂ ಅಲ್ಲಿ ಕಾಣದ ಹಾಗೆ ಅದನ್ನು ನದಿಗೆ ಎಳೆದು ಹಾಕುವೆವು ಅಂದನು.

17:14b.2SA.017.014 ಆಗ ಅಬ್ಷಾ ಲೋಮನೂ ಇಸ್ರಾಯೇಲಿನ ಎಲ್ಲಾ ಜನರೂಅಹೀತೋಫೆಲನ ಆಲೋಚನೆಗಿಂತ ಅರ್ಕೀಯನಾದ ಹೂಷೈಯ ಆಲೋಚನೆ ಒಳ್ಳೇದು ಅಂದರು. ತಾನು ಅಬ್ಷಾಲೋಮನ ಮೇಲೆ ಕೇಡನ್ನು ಬರಮಾಡುವ ಹಾಗೆ ಅಹೀತೋಫೆಲನ ಒಳ್ಳೇ ಆಲೋಚನೆಯನ್ನು ವ್ಯರ್ಥಮಾಡುವದಕ್ಕೆ ಕರ್ತನು ನೇಮಿಸಿದ್ದನು.

17:15b.2SA.017.015 ಹೂಷೈಯು ಯಾಜಕರಾದ ಚಾದೋಕನಿಗೂ ಎಬ್ಯಾತಾರನಿಗೂ--ಅಹೀತೋಫೆಲನು ಅಬ್ಷಾಲೋ ಮನಿಗೂ ಇಸ್ರಾಯೇಲಿನ ಹಿರಿಯರಿಗೂ ಇಂಥಿಂಥ ಆಲೋಚನೆ ಹೇಳಿದನು.

17:16b.2SA.017.016 ಆದರೆ ನಾನು ಇಂಥಿಂಥ ಆಲೋಚನೆ ಹೇಳಿದೆನು. ಆದದರಿಂದ ನೀವು ತ್ವರೆ ಯಾಗಿ ಕಳುಹಿಸಿ ದಾವೀದನಿಗೆ ತಿಳಿಸಬೇಕಾದದ್ದೇ ನಂದರೆ--ನೀನು ರಾತ್ರಿಯಲ್ಲಿ ಅರಣ್ಯದ ಬೈಲುಗಳಲ್ಲಿ ತಂಗಬೇಡ; ಅರಸನೂ ಅವನ ಸಂಗಡವಿರುವ ಎಲ್ಲಾ ಜನರೂ ನಾಶವಾಗದ ಹಾಗೆ ಬೇಗ ದಾಟಿಹೋಗು ಅಂದನು.

17:17b.2SA.017.017 ಆದರೆ ಯೋನಾತಾನನೂ ಅಹೀಮಾ ಚನೂ ಪಟ್ಟಣದಲ್ಲಿ ಪ್ರವೇಶಿಸಿ ಯಾರೂ ನೋಡ ದಂತೆ ಎನ್ರೋಗೆಲಿನ ಬಳಿಯಲ್ಲಿ ಇದ್ದರು. ಆದದರಿಂದ ಅವರು ಅರಸನಾದ ದಾವೀದನಿಗೆ ಅದನ್ನು ತಿಳಿಸುವ ಹಾಗೆ ಒಬ್ಬ ದಾಸಿಯು ಹೋಗಿ ಅವರಿಗೆ ಹೇಳಿದಳು.

17:18b.2SA.017.018 ಆದರೆ ಒಬ್ಬ ಹುಡುಗನು ಅವರನ್ನು ನೋಡಿ ಅಬ್ಷಾ ಲೋಮನಿಗೆ ತಿಳಿಸಿದನು. ಆದದರಿಂದ ಅವರಿಬ್ಬರು ಶೀಘ್ರವಾಗಿ ಹೋಗಿ ಬಹುರೀಮಿನಲ್ಲಿರುವ ಒಬ್ಬ ಮನುಷ್ಯನ ಮನೆಯಲ್ಲಿ ಪ್ರವೇಶಿಸಿ ಅವನ ಅಂಗಳ ದಲ್ಲಿರುವ ಬಾವಿಯಲ್ಲಿ ಇಳಿದರು.

17:19b.2SA.017.019 ಆಗ ಆ ಮನೆ ಯವಳು ಬಾವಿಯ ಮೇಲೆ ಒಂದು ವಸ್ತ್ರವನ್ನು ಹಾಸಿ ನುಚ್ಚನ್ನು ಹರವಿಬಿಟ್ಟಳು. ಆದದರಿಂದ ಕಾರ್ಯ ತಿಳಿ ಯದೆ ಹೋಯಿತು.

17:20b.2SA.017.020 ಅಬ್ಷಾಲೋಮನ ಸೇವಕರು ಮನೆಯೊಳಗೆ ಬಂದು ಆ ಸ್ತ್ರೀಯನ್ನು--ಅಹೀಮಾ ಚನೂ ಯೋನಾತಾನನೂ ಎಲ್ಲಿ ಎಂದು ಕೇಳಿದಾಗ ಅವಳು ಅವರಿಗೆ--ಹಳ್ಳವನ್ನು ದಾಟಿಹೋದರು ಅಂದಳು. ಅವರು ಹುಡುಕಿ ಕಾಣದೆ ಹೋಗಿ ಯೆರೂಸಲೇಮಿಗೆ ಹಿಂತಿರುಗಿದರು.

17:21b.2SA.017.021 ಆದರೆ ಇವರು ಹೋದ ತರುವಾಯ ಅವರು ಬಾವಿಯೊಳಗಿಂದ ಏರಿ ಹೋಗಿ ಅರಸನಾದ ದಾವೀದನಿಗೆ--ನೀನು ಶೀಘ್ರ ವಾಗಿ ಎದ್ದು ಹೊಳೆ ದಾಟಿಹೋಗು; ಯಾಕಂದರೆ ಈ ಪ್ರಕಾರ ಅಹೀತೋಫೆಲನು ನಿನಗೆ ವಿರೋಧ ವಾಗಿ ಆಲೋಚನೆ ಹೇಳಿದನು ಅಂದರು.

17:22b.2SA.017.022 ಆಗ ದಾವೀದನೂ ಅವನ ಸಂಗಡ ಇದ್ದ ಎಲ್ಲಾ ಜನರೂ ಎದ್ದು ಯೊರ್ದನನ್ನು ದಾಟಿದರು. ಉದಯವಾಗುವ ದಕ್ಕಿಂತ ಮುಂಚೆ ಒಬ್ಬರಾದರೂ ಹಿಂದುಳಿದಿರಲಿಲ್ಲ.

17:23b.2SA.017.023 ಅಹೀತೋಫೆಲನು ತನ್ನ ಯೋಚನೆಯ ಪ್ರಕಾರ ನಡೆಯಲಿಲ್ಲವೆಂದು ನೋಡಿದಾಗ ತನ್ನ ಕತ್ತೆಯ ಮೇಲೆ ತಡಿಯನ್ನು ಹಾಕಿ ಏರಿ ಪಟ್ಟಣದಲ್ಲಿರುವ ತನ್ನ ಮನೆಗೆ ಹೋಗಿ ಅದನ್ನು ಕ್ರಮಪಡಿಸಿ ಉರ್ಲುಹಾಕಿ ಕೊಂಡು ಸತ್ತು ತನ್ನ ತಂದೆಯ ಸಮಾಧಿಯಲ್ಲಿ ಹೂಣಲ್ಪಟ್ಟನು.

17:24b.2SA.017.024 ದಾವೀದನು ಮಹನಯಿಮಿಗೆ ಬಂದನು. ಇದ ಲ್ಲದೆ ಅಬ್ಷಾಲೋಮನೂ ಅವನ ಸಂಗಡ ಇಸ್ರಾ ಯೇಲ್‌ ಎಲ್ಲಾ ಜನರೂ ಯೊರ್ದನನ್ನು ದಾಟಿದರು.

17:25b.2SA.017.025 ಅಬ್ಷಾಲೋಮನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೈನ್ಯದ ಅಧಿಪತಿಯನ್ನಾಗಿ ನೇಮಿಸಿದನು. ನಾಹಾಷನಿಗೆ ಮಗಳಾದ ಅಬೀಗೈಲಳ ಬಳಿಗೆ ಪ್ರವೇಶಿಸಿದ ಇಸ್ರಾಯೇಲ್ಯನಾದ ಇತ್ರನೆಂಬ ಹೆಸರುಳ್ಳ ಈ ಅಮಾಸನು ಒಬ್ಬ ಮಗನಾಗಿದ್ದನು. ಅಬೀಗೈಲಳು ಯೋವಾಬನ ತಾಯಿಯಾದ ಚೆರೂಯಳಿಗೆ ಸಹೋದರಿಯಾಗಿದ್ದಳು.

17:26b.2SA.017.026 ಹೀಗೆಯೇ ಇಸ್ರಾಯೇ ಲ್ಯರೂ ಅಬ್ಷಾಲೋಮನೂ ಗಿಲ್ಯಾದ್‌ ದೇಶದಲ್ಲಿ ದಂಡಿಳಿದರು.

17:27b.2SA.017.027 ದಾವೀದನು ಮಹನಯಿಮಿಗೆ ಬಂದಾಗ ಏನಾ ಯಿತಂದರೆ, ಅಮ್ಮೋನನ ಮಕ್ಕಳ ರಬ್ಬಾ ಪಟ್ಟಣದ ನಾಹಾಷನ ಮಗನಾದ ಶೋಬಿಯೂ ಲೋದೆಬಾ ರಿನ ಊರಿನವನಾಗಿರುವ ಅವ್ಮೆಾಯೇಲನ ಮಗನಾದ ಮಾಕೀರ್‌

17:28b.2SA.017.028 ರೋಗೆಲೀಮ್‌ ಊರಿನ ಗಿಲ್ಯಾದ್ಯ ನಾದ ಬರ್ಜಿಲೈಯೂ ಹಾಸಿಗೆಗಳನ್ನೂ ಬಟ್ಟಲು ಗಳನ್ನೂ ಮಡಿಕೆಗಳನ್ನೂ ಗೋಧಿಯನ್ನೂ ಜವೆಗೋಧಿ ಯನ್ನೂ ಹಿಟ್ಟನ್ನೂ ಹುರಿದ ಕಾಳನ್ನೂಅವರೆಯನ್ನೂ ಹೆಸರನ್ನೂ ಹುರಿದ ಕಡಲೆಯನ್ನೂ ಜೇನು ತುಪ್ಪವನ್ನೂ ಬೆಣ್ಣೆಯನ್ನೂ ಕುರಿಗಳನ್ನೂ ಹಸುವಿನ ಗಿಣ್ಣದ ಗಡ್ಡೆಗಳನ್ನೂ ದಾವೀದನಿಗೂ ಅವನ ಸಂಗಡ ಲಿದ್ದ ಜನರಿಗೂ ತಿನ್ನುವದಕ್ಕೆ ತಂದರು. ಯಾಕಂದರೆ ಅರಣ್ಯದಲ್ಲಿ ಜನರು ಹಸಿದು ದಣಿದು ದಾಹವಾಗಿರು ವರೆಂದು ಅಂದುಕೊಂಡರು.

17:29b.2SA.017.029 ಅವರೆಯನ್ನೂ ಹೆಸರನ್ನೂ ಹುರಿದ ಕಡಲೆಯನ್ನೂ ಜೇನು ತುಪ್ಪವನ್ನೂ ಬೆಣ್ಣೆಯನ್ನೂ ಕುರಿಗಳನ್ನೂ ಹಸುವಿನ ಗಿಣ್ಣದ ಗಡ್ಡೆಗಳನ್ನೂ ದಾವೀದನಿಗೂ ಅವನ ಸಂಗಡ ಲಿದ್ದ ಜನರಿಗೂ ತಿನ್ನುವದಕ್ಕೆ ತಂದರು. ಯಾಕಂದರೆ ಅರಣ್ಯದಲ್ಲಿ ಜನರು ಹಸಿದು ದಣಿದು ದಾಹವಾಗಿರು ವರೆಂದು ಅಂದುಕೊಂಡರು.

18

18:1b.2SA.018.001 ದಾವೀದನು ತನ್ನ ಸಂಗಡಲಿರುವ ಜನರನ್ನು ಲೆಕ್ಕಮಾಡಿ ಅವರ ಮೇಲೆ ಸಾವಿರ ಗಳಿಗೂ ನೂರುಗಳಿಗೂ ಅಧಿಪತಿಗಳನ್ನು ನೇಮಿಸಿ ದನು.

18:2b.2SA.018.002 ಅವನು ಸೈನ್ಯವನ್ನು ಮೂರು ಪಾಲು ಮಾಡಿ ಒಂದು ಪಾಲನ್ನು ಯೋವಾಬನಿಗೂ ಇನ್ನೊಂದನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ ಮತ್ತೊಂದನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿ--ನಾನೂ ನಿಮ್ಮ ಸಂಗಡ ಬರುತ್ತೇನೆ ಎಂದು ಹೇಳಿದನು.

18:3b.2SA.018.003 ಆದರೆ ಜನರು ಅವನಿಗೆ--ನೀನು ನಮ್ಮ ಸಂಗಡ ಬರಬೇಡ; ಯಾಕಂದರೆ ನಾವು ಓಡಿ ಹೋದರೂ ಅವರು ನಮ್ಮನ್ನು ಲಕ್ಷಿಸುವದಿಲ್ಲ; ನಮ್ಮಲ್ಲಿ ಅರ್ಧ ಜನರು ಸತ್ತುಹೋದರೂ ಅವರು ನಮ್ಮನ್ನು ಲಕ್ಷಿಸುವದಿಲ್ಲ. ನೀನಾದರೆ ನಮ್ಮಲ್ಲಿ ಹತ್ತು ಸಾವಿರ ಜನಕ್ಕೆ ಸರಿಯಾಗಿದ್ದೀ. ಈಗ ನೀನು ಪಟ್ಟಣದಲ್ಲಿದ್ದು ನಮಗೆ ಸಹಾಯವಾಗಿರುವದು ಉತ್ತಮ ಅಂದರು.

18:4b.2SA.018.004 ಆಗ ಅರಸನು ಅವರಿಗೆ--ನಿಮಗೆ ಉತ್ತಮವಾಗಿ ಕಾಣುವದನ್ನು ಮಾಡುವೆನು ಅಂದನು; ಅರಸನು ಬಾಗಲಬಳಿಯಲ್ಲಿ ನಿಂತನು; ಜನರೆಲ್ಲಾ ನೂರು ನೂರಾಗಿಯೂ ಸಾವಿರ ಸಾವಿರವಾಗಿಯೂ ಹೊರ ಟರು.

18:5b.2SA.018.005 ಆದರೆ ಅರಸನು ಯೋವಾಬನಿಗೂ ಅಬೀ ಷೈಯನಿಗೂ ಇತ್ತೈಗೂ ಆಜ್ಞಾಪಿಸಿ--ನನಗೋಸ್ಕರ ಯೌವನಸ್ಥನಾದ ಅಬ್ಷಾಲೋಮನನ್ನು ಕರುಣಿಸಿರಿ ಅಂದನು. ಹೀಗೆ ಅರಸನು ಅಬ್ಷಾಲೋಮನನ್ನು ಕುರಿತು ಅಧಿಪತಿಗಳೆಲ್ಲರಿಗೂ ಕೊಟ್ಚ ಆಜ್ಞೆಯನ್ನು ಜನರೆಲ್ಲರೂ ಕೇಳಿದರು.

18:6b.2SA.018.006 ಹೀಗೆಯೇ ಜನರು ಇಸ್ರಾಯೇಲಿಗೆ ವಿರೋಧವಾಗಿ ಹೊರಟರು.

18:7b.2SA.018.007 ಯುದ್ಧವು ಎಫ್ರಾ ಯಾಮ್‌ ಅಡವಿಯಲ್ಲಿತ್ತು. ಅಲ್ಲಿ ಇಸ್ರಾಯೇಲ್ಯರು ದಾವೀದನ ಸೇವಕರ ಮುಂದೆ ಸಂಹಾರವಾದರು.

18:8b.2SA.018.008 ಆ ಹೊತ್ತು ಅಲ್ಲಿ ದೊಡ್ಡ ಸಂಹಾರವಾಯಿತು; ಇಪ್ಪತ್ತು ಸಾವಿರ ಜನರು ಬಿದ್ದರು. ಅಲ್ಲಿನ ಯುದ್ಧವು ದೇಶವೆ ಲ್ಲಾದರ ಮೇಲೆ ವಿಸ್ತರಿಸಲ್ಪಟ್ಟಿತು. ಆ ಹೊತ್ತು ಜನರಲ್ಲಿ ಕತ್ತಿಗಿಂತ ಅಡವಿಯು ಹೆಚ್ಚಾದವರನ್ನು ನುಂಗಿಬಿಟ್ಟಿತು.

18:9b.2SA.018.009 ಆಗ ಅಬ್ಷಾಲೋಮನು ದಾವೀದನ ಸೇವಕರಿಗೆ ಎದುರಾಗಿ ಬಂದನು. ಆದರೆ ಅಬ್ಷಾಲೋಮನು ಹೇಸರ ಕತ್ತೆಯ ಮೇಲೆ ಏರಿದ್ದನು. ಆ ಹೇಸರ ಕತ್ತೆಯು ಒಂದು ದೊಡ್ಡ ಏಲಾ ಮರದ ಬಲವಾದ ಕೊಂಬೆಗಳ ಕೆಳಗೆ ಬಂದಾಗ ಅವನ ತಲೆಯು ಆ ಮರದ ಕೊಂಬೆ ಯಲ್ಲಿ ಸಿಕ್ಕಿಕೊಂಡಿತು. ಆದದರಿಂದ ಅವನು ಹತ್ತಿದ್ದ ಹೇಸರ ಕತ್ತೆಯು ಹೊರಟು ಹೋಯಿತು.

18:10b.2SA.018.010 ಆಗ ಅಬ್ಷಾಲೋಮನು ದಾವೀದನ ಸೇವಕರಿಗೆ ಎದುರಾಗಿ ಬಂದನು. ಆದರೆ ಅಬ್ಷಾಲೋಮನು ಹೇಸರ ಕತ್ತೆಯ ಮೇಲೆ ಏರಿದ್ದನು. ಆ ಹೇಸರ ಕತ್ತೆಯು ಒಂದು ದೊಡ್ಡ ಏಲಾ ಮರದ ಬಲವಾದ ಕೊಂಬೆಗಳ ಕೆಳಗೆ ಬಂದಾಗ ಅವನ ತಲೆಯು ಆ ಮರದ ಕೊಂಬೆ ಯಲ್ಲಿ ಸಿಕ್ಕಿಕೊಂಡಿತು. ಆದದರಿಂದ ಅವನು ಹತ್ತಿದ್ದ ಹೇಸರ ಕತ್ತೆಯು ಹೊರಟು ಹೋಯಿತು.

18:11b.2SA.018.011 ಅದಕ್ಕೆ ಯೋವಾ ಬನು ಅವನಿಗೆ--ಇಗೋ, ನೀನು ನೋಡಿ ಅವನನ್ನು ಯಾಕೆ ಅಲ್ಲಿ ನೆಲಕ್ಕೆ ಹೊಡೆದು ಬಿಡಲಿಲ್ಲ? ನಾನು ನಿನಗೆ ಹತ್ತು ಶೇಕೆಲ್‌ ಬೆಳ್ಳಿಯನ್ನೂ ಒಂದು ನಡು ಕಟ್ಟನ್ನೂ ಕೊಡುತ್ತಿದ್ದೆನು ಅಂದನು.

18:12b.2SA.018.012 ಆದರೆ ಆ ಮನುಷ್ಯನು ಯೋವಾಬನಿಗೆ--ನನ್ನ ಕೈಯಲ್ಲಿ ಸಾವಿರ ಶೆಕೇಲ್‌ ಬೆಳ್ಳಿಯನ್ನು ಕೊಟ್ಟರೂ ನಾನು ಅರಸನ ಮಗನ ಮೇಲೆ ನನ್ನ ಕೈ ಚಾಚುವದಿಲ್ಲ. ಯಾಕಂದರೆಯೌವನಸ್ಥನಾದ ಅಬ್ಷಾಲೋಮನನ್ನು ಯಾರೂ ಮುಟ್ಟದ ಹಾಗೆ ಜಾಗ್ರತೆಯಾಗಿರ್ರಿ ಎಂದು ಅರಸನು ನಿನಗೂ ಅಬೀಷೈನಿಗೂ ಇತ್ತೈಗೂ ನಮಗೆ ಕೇಳಿಸು ವಂತೆ ಆಜ್ಞಾಪಿಸಿದ್ದನು.

18:13b.2SA.018.013 ಹಾಗಿರುವಾಗ ನಾನೇ ನನ್ನ ಪ್ರಾಣಕ್ಕೆ ಮೋಸ ಮಾಡಿಕೊಂಡೆನು. ಯಾಕಂದರೆ ಅರಸನಿಗೆ ಯಾವ ಕಾರ್ಯವಾದರೂ ಬಚ್ಚಿಡಲ್ಪಟ್ಟದ್ದಿಲ್ಲ; ನೀನೇ ನನಗೆ ವಿರೋಧವಾಗಿ ನಿಂತಿರುವಿ ಅಂದನು.

18:14b.2SA.018.014 ಆಗ ಯೋವಾಬನು--ನಾನು ಹೀಗೆ ನಿನ್ನ ಮುಂದೆ ಆಲಸ್ಯಮಾಡೆನು ಎಂದು ಹೇಳಿ ಮೂರು ಈಟಿಗಳನ್ನು ತನ್ನ ಕೈಯಲ್ಲಿ ತಕ್ಕೊಂಡು ಅಬ್ಷಾಲೋಮನು ಇನ್ನೂ ಏಲಾಮರದ ಮಧ್ಯದಲ್ಲಿ ಜೀವದಿಂದಿರುವಾಗ ಅವು ಗಳನ್ನು ಅವನ ಎದೆಗೆ ತಿವಿದನು.

18:15b.2SA.018.015 ಯೋವಾಬನ ಆಯುಧ ಹಿಡಿಯುವ ಹತ್ತು ಮಂದಿ ಯೌವನಸ್ಥರು ಸುತ್ತಿಕೊಂಡು ಅಬ್ಷಾಲೋಮನನ್ನು ಕೊಂದುಹಾಕಿದರು.

18:16b.2SA.018.016 ಯೋವಾಬನು ತುತೂರಿಯನ್ನು ಊದಿದ್ದರಿಂದ ಜನರು ಇಸ್ರಾಯೇಲ್ಯರನ್ನು ಹಿಂದಟ್ಟುವದನ್ನು ಬಿಟ್ಟು ಹಿಂತಿರುಗಿದರು.

18:17b.2SA.018.017 ಯೋವಾಬನು ಜನರನ್ನು ತಡೆ ದನು. ಅವರು ಅಬ್ಷಾಲೋಮನನ್ನು ತಕ್ಕೊಂಡು ಅಡವಿ ಯಲ್ಲಿರುವ ಒಂದು ದೊಡ್ಡ ಕುಣಿಯಲ್ಲಿ ಹಾಕಿ ಅವನ ಮೇಲೆ ದೊಡ್ಡ ಕಲ್ಲಿನ ಕುಪ್ಪೆಯನ್ನು ಹಾಕಿದರು. ಆಗ ಇಸ್ರಾಯೇಲ್ಯರೆಲ್ಲರೂ ತಮ್ಮ ಗುಡಾರಗಳಿಗೆ ಓಡಿ ಹೋದರು.

18:18b.2SA.018.018 ಆದರೆ ಅಬ್ಷಾಲೋಮನು ಜೀವ ದಿಂದಿರುವಾಗ--ನನ್ನ ಹೆಸರನ್ನು ಜ್ಞಾಪಕಮಾಡುವ ಹಾಗೆ ನನಗೆ ಮಗನಿಲ್ಲವೆಂದು ಹೇಳಿ ಅರಸನ ತಗ್ಗಿನ ಲ್ಲಿರುವ ಒಂದು ಸ್ತಂಭವನ್ನು ತಕ್ಕೊಂಡು ತನಗೋಸ್ಕರ ನಿಲ್ಲಿಸಿ ಆ ಸ್ತಂಭಕ್ಕೆ ತನ್ನ ಹೆಸರನ್ನಿಟ್ಟನು. ಅದು ಈ ದಿನದ ವರೆಗೂ ಅಬ್ಷಾಲೋಮನ ಸ್ಥಳ ಎಂದು ಹೇಳಲ್ಪಡುವದು.

18:19b.2SA.018.019 ಆಗ ಚಾದೋಕನ ಮಗನಾದ ಅಹೀಮಾಚನುಕರ್ತನು ರಾಜನ ಶತ್ರುಗಳ ಮೇಲೆ ಹೇಗೆ ನ್ಯಾಯ ತೀರಿಸಿದ್ದಾನೆಂಬ ವರ್ತಮಾನಗಳನ್ನು ಅರಸನಿಗೆ ತಿಳಿ ಸುವ ಹಾಗೆ ನಾನು ಓಡಿಹೋಗುವದಕ್ಕೆ ಅಪ್ಪಣೆಯಾಗ ಬೇಕು ಅಂದನು.

18:20b.2SA.018.020 ಯೋವಾಬನು ಅವನಿಗೆ--ನೀನು ಈ ಹೊತ್ತು ವರ್ತಮಾನ ತಕ್ಕೊಂಡು ಹೋಗಬೇಡ; ಮತ್ತೊಂದು ದಿವಸ ವರ್ತಮಾನ ತಕ್ಕೊಂಡು ಹೋಗ ಬಹುದು. ಅರಸನ ಮಗನು ಸತ್ತದ್ದರಿಂದ ಈ ಹೊತ್ತು ನೀನು ವರ್ತಮಾನ ತಕ್ಕೊಂಡು ಹೋಗ ಬೇಡ ಅಂದನು.

18:21b.2SA.018.021 ಯೋವಾಬನು ಕೂಷ್ಯನಿಗೆ--ನೀನು ಹೋಗಿ ನೋಡಿದ್ದನ್ನು ಅರಸನಿಗೆ ತಿಳಿಸು ಅಂದನು.

18:22b.2SA.018.022 ಕೂಷ್ಯನು ಯೋವಾಬನಿಗೆ ಅಡ್ಡಬಿದ್ದು ಓಡಿಹೋದನು. ಆಗ ಚಾದೋಕನ ಮಗನಾದ ಅಹೀಮಾಚನು ಯೋವಾಬನಿಗೆ--ನಾನು ಕೂಷ್ಯನ ಹಿಂದೆ ಓಡಿಹೋಗುವ ಹಾಗೆ ಹೇಗಾದರೂ ಅಪ್ಪಣೆ ಕೊಡಬೇಕು ಅಂದನು. ಅದಕ್ಕೆ ಯೋವಾಬನು--ನನ್ನ ಮಗನೇ, ನಿನಗೆ ವರ್ತಮಾನ ಇಲ್ಲದಿರುವಾಗ ನೀನು ಓಡುವದು ಯಾಕೆ ಅಂದನು. ಅವನು ಹೇಗಾ ದರೂ ಓಡಿಹೋಗುತ್ತೇನೆ ಅಂದಾಗ ಓಡು ಅಂದನು.

18:23b.2SA.018.023 ಆಗ ಅಹೀಮಾಚನು ಬೈಲು ಮಾರ್ಗವಾಗಿ ಓಡಿ ಕೂಷ್ಯನನ್ನು ದಾಟಿಹೋದನು.

18:24b.2SA.018.024 ಆದರೆ ದಾವೀದನು ಎರಡು ಬಾಗಲುಗಳ ಮಧ್ಯ ದಲ್ಲಿ ಕುಳಿತಿದ್ದನು. ಕಾವಲುಗಾರನು ಗೋಪುರದ ಮಾಳಿಗೆಯ ಮೇಲೆ ಏರಿ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಒಬ್ಬ ಮನುಷ್ಯನು ಒಂಟಿಯಾಗಿ ಓಡಿ ಬರು ತ್ತಿದ್ದನು.

18:25b.2SA.018.025 ಆಗ ಕಾವಲುಗಾರನು ಕೂಗಿ ಅರಸನಿಗೆ ತಿಳಿಸಿದನು. ಅರಸನು--ಅವನು ಒಬ್ಬನಾಗಿ ಬಂದರೆ ಅವನ ಬಾಯಿಯಲ್ಲಿ ವರ್ತಮಾನ ಇರುವದು ಅಂದನು.

18:26b.2SA.018.026 ಅವನು ಬಂದು ಸವಿಾಪಿಸಿದನು. ಕಾವ ಲುಗಾರನು ಬೇರೊಬ್ಬನು ಓಡಿ ಬರುವದನ್ನು ಕಂಡು ಬಾಗಲು ಕಾಯುವವನನ್ನು ಕರೆದು--ಇಗೋ, ಮತ್ತೊ ಬ್ಬನು ಒಂಟಿಯಾಗಿ ಓಡಿ ಬರುತ್ತಿದ್ದಾನೆ ಅಂದನು.

18:27b.2SA.018.027 ಅದಕ್ಕೆ ಅರಸನು--ಅವನು ಸಹ ವರ್ತಮಾನ ತಕ್ಕೊಂಡು ಬರುತ್ತಾನೆ ಅಂದನು. ಕಾವಲುಗಾರನುಮೊದಲನೆಯವನ ಓಟವು ಚಾದೋಕನ ಮಗನಾದ ಅಹೀಮಾಚನ ಓಟದ ಹಾಗೆ ಇರುವದೆಂದು ನನಗೆ ಕಾಣುತ್ತದೆ ಅಂದನು. ಅದಕ್ಕೆ ಅರಸನು--ಅವನು ಒಳ್ಳೆಯವನು, ಒಳ್ಳೇ ವರ್ತಮಾನವನ್ನು ತರುತ್ತಾನೆ ಅಂದನು.

18:28b.2SA.018.028 ಆಗ ಅಹೀಮಾಚನು ಕೂಗಿ ಅರಸನಿಗೆಎಲ್ಲವೂ ಕ್ಷೇಮ ಎಂದು ಹೇಳಿ ಅರಸನ ಮುಂದೆಅರಸನಾದ ನನ್ನ ಒಡೆಯನಿಗೆ ವಿರೋಧವಾಗಿ ತಮ್ಮ ಕೈಗಳನ್ನೆತ್ತಿದ ಜನರನ್ನು ಒಪ್ಪಿಸಿಕೊಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ ಅಂದನು.

18:29b.2SA.018.029 ಅರಸನು-- ಯೌವನಸ್ಥನಾದ ಅಬ್ಷಾಲೋಮನು ಕ್ಷೇಮವೋಎಂದು ಕೇಳಿದನು. ಅದಕ್ಕೆ ಅಹೀಮಾಚನು ಪ್ರತ್ಯುತ್ತರ ವಾಗಿ--ಯೋವಾಬನು ಅರಸನ ಸೇವಕನನ್ನು ನಿನ್ನ ಸೇವಕನಾದ ನನ್ನನ್ನು ಕಳುಹಿಸಿದಾಗ ದೊಡ್ಡ ಸಮೂಹ ವನ್ನು ಕಂಡೆನು. ಆದರೆ ಅದು ಏನೋ ನಾನರಿಯೆ ಅಂದನು.

18:30b.2SA.018.030 ಅರಸನು--ನೀನು ಇತ್ತ ಬಂದು ನಿಲ್ಲು ಅಂದನು. ಅವನು ಅತ್ತ ಹೋಗಿ ನಿಂತನು; ಆಗ ಇಗೋ, ಕೂಷ್ಯನು ಬಂದನು.

18:31b.2SA.018.031 ಕೂಷ್ಯನು--ಅರಸ ನಾದ ನನ್ನ ಯಜಮಾನನಿಗೆ ವರ್ತಮಾನ ಉಂಟು. ಏನಂದರೆ, ಕರ್ತನು ಈ ಹೊತ್ತು ನಿನಗೆ ವಿರೋಧವಾಗಿ ಎದ್ದು ಎಲ್ಲರಿಗೂ ಮುಯ್ಯಿಗೆ ಮುಯ್ಯಿ ತೀರಿಸಿದ್ದಾನೆ ಅಂದನು.

18:32b.2SA.018.032 ಅರಸನು ಕೂಷ್ಯನಿಗೆ ಯೌವನಸ್ಥನಾದ ಅಬ್ಷಾಲೋಮನಿಗೆ ಕ್ಷೇಮವೋ ಅಂದನು. ಕೂಷ್ಯನು ಪ್ರತ್ಯುತ್ತರವಾಗಿ--ಅರಸನಾದ ನನ್ನ ಒಡೆಯನ ಶತ್ರು ಗಳು ಕೇಡುಮಾಡುವಂತೆ ನಿನಗೆ ವಿರೋಧವಾಗಿ ಹೇಳುವ ಎಲ್ಲರೂ ಆ ಯೌವನಸ್ಥನ ಹಾಗೆಯೇ ಇರಲಿ ಅಂದನು.ಆಗ ಅರಸನು ನಡುಗುತ್ತಾ ಊರ ಬಾಗಲು ಮೇಲಿರುವ ಕೊಠಡಿಗೆ ಏರಿ ಹೋದನು; ಹೋಗು ವಾಗ ಅತ್ತು--ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ ನಿನಗೆ ಬದಲಾಗಿ ನಾನು ಸತ್ತಿದ್ದರೆ ಉತ್ತಮವಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ ನನ್ನ ಮಗನೇ, ಅಂದನು.

18:33b.2SA.018.033 ಆಗ ಅರಸನು ನಡುಗುತ್ತಾ ಊರ ಬಾಗಲು ಮೇಲಿರುವ ಕೊಠಡಿಗೆ ಏರಿ ಹೋದನು; ಹೋಗು ವಾಗ ಅತ್ತು--ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ ನಿನಗೆ ಬದಲಾಗಿ ನಾನು ಸತ್ತಿದ್ದರೆ ಉತ್ತಮವಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ ನನ್ನ ಮಗನೇ, ಅಂದನು.

19

19:1b.2SA.019.001 ಆಗ ಇಗೋ, ಅರಸನು ಅಬ್ಷಾಲೋಮನಿ ಗೋಸ್ಕರ ಅತ್ತು ದುಃಖಪಡುತ್ತಾ ಇದ್ದಾ ನೆಂದು ಯೋವಾಬನಿಗೆ ತಿಳಿಸಲ್ಪಟ್ಟಿತು.

19:2b.2SA.019.002 ಆ ದಿನ ಆ ಜಯವು ಎಲ್ಲಾ ಜನರಿಗೂ ದುಃಖವಾಯಿತು. ಯಾಕಂದರೆ ಅರಸನು ತನ್ನ ಮಗನಿಗೋಸ್ಕರ ವ್ಯಥೆ ಪಡುತ್ತಾ ಇದ್ದಾನೆಂದು ಜನರು ಕೇಳಿದರು.

19:3b.2SA.019.003 ಆದ ದರಿಂದ ಜನರು ಯುದ್ಧದಲ್ಲಿ ಓಡಿಹೋಗಿ ಅವಮಾನ ಪಟ್ಟು ಕಳ್ಳತನವಾಗಿ ಬರುವ ಹಾಗೆ ಆ ದಿನದಲ್ಲಿ ಕಳ್ಳತನವಾಗಿ ಪಟ್ಟಣದೊಳಗೆ ಬಂದರು.

19:4b.2SA.019.004 ಆದರೆ ಅರಸನು ಮೋರೆಯನ್ನು ಮುಚ್ಚಿಕೊಂಡು ಮಹಾ ಶಬ್ದ ದಿಂದ--ನನ್ನ ಮಗನಾದ ಅಬ್ಷಾಲೋಮನೇ, ಅಬ್ಷಾ ಲೋಮನೇ, ನನ್ನ ಮಗನೇ, ನನ್ನ ಮಗನೇ ಎಂದು ಗೋಳಾಡಿದನು.

19:5b.2SA.019.005 ಆಗ ಯೋವಾಬನು ಮನೆಯೊಳಗೆ ಅರಸನ ಬಳಿಗೆ ಬಂದು ಅವನಿಗೆ--

19:6b.2SA.019.006 ನೀನು ನಿನ್ನ ಶತ್ರು ಗಳನ್ನು ಪ್ರೀತಿಮಾಡಿ ನಿನ್ನ ಮಿತ್ರರನ್ನು ಹಗೆಮಾಡಿ ದ್ದರಿಂದ ಈ ಹೊತ್ತು ನಿನ್ನ ಪ್ರಾಣವನ್ನೂ ಕುಮಾರರ ಪ್ರಾಣಗಳನ್ನೂ ಕುಮಾರ್ತೆಯರ ಪ್ರಾಣಗಳನ್ನೂ ಹೆಂಡತಿಯರ ಪ್ರಾಣಗಳನ್ನೂ ಉಪಪತ್ನಿಗಳ ಪ್ರಾಣ ಗಳನ್ನೂ ರಕ್ಷಿಸಿದ ನಿನ್ನ ಸೇವಕರ ಮುಖಗಳನ್ನು ನಾಚಿಕೆ ಪಡಿಸಿದ್ದೀ. ಪ್ರಧಾನರಾದವರೂ ಸೇವಕರಾದವರೂ ನಿನಗೆ ಏನೂ ಇಲ್ಲವೆಂದು ಈಹೊತ್ತು ತಿಳಿಯ ಮಾಡಿದಿ. ಈಹೊತ್ತು ನಾವೆಲ್ಲರೂ ಸತ್ತು ಅಬ್ಷಾಲೋ ಮನು ಬದುಕಿದ್ದರೆ ನಿನಗೆ ಸಂತೋಷವಾಗುತ್ತಿತ್ತೆಂದು ನನಗೆ ತಿಳಿಯುತ್ತದೆ.

19:7b.2SA.019.007 ಈಗ ನೀನು ಎದ್ದು ಹೊರಟು ಬಂದು ನಿನ್ನ ಸೇವಕರ ಸಂಗಡ ಸಮಾಧಾನವಾಗಿ ಮಾತನಾಡು. ನೀನು ಹೊರಗೆ ಬಾರದೆ ಇದ್ದರೆ ಈ ರಾತ್ರಿಯಲ್ಲಿ ಒಬ್ಬರಾದರೂ ನಿನ್ನ ಸಂಗಡ ಇರುವ ದಿಲ್ಲವೆಂದು ಕರ್ತನ ಮೇಲೆ ಆಣೆ ಇಟ್ಟು ಹೇಳುತ್ತೇನೆ. ಆಗ ನಿನ್ನ ಯೌವ್ವನತನದಿಂದ ಈ ದಿನದ ವರೆಗೂ ನಿನಗೆ ಬಂದ ಎಲ್ಲಾ ಕೇಡಿಗಿಂತ ಅಧಿಕ ಕೇಡಾಗಿರುವದು ಅಂದನು.

19:8b.2SA.019.008 ಆಗ ಅರಸನು ಎದ್ದು ಹೋಗಿ ಬಾಗಲಲ್ಲಿ ಕುಳಿತನು. ಇಗೋ, ಅರಸನು ಬಾಗಲಲ್ಲಿ ಕುಳಿತಿ ದ್ದಾನೆಂದು ಎಲ್ಲಾ ಜನರಿಗೆ ತಿಳಿಸಲ್ಪಟ್ಟದ್ದರಿಂದ ಜನ ರೆಲ್ಲರು ಅರಸನ ಎದುರಿಗೆ ಬಂದರು. ಯಾಕಂದರೆ ಇಸ್ರಾಯೇಲ್ಯರೆಲ್ಲರು ತಮ್ಮ ತಮ್ಮ ಗುಡಾರಗಳಿಗೆ ಓಡಿ ಹೋಗಿದ್ದರು.

19:9b.2SA.019.009 ಆದರೆ ಇಸ್ರಾಯೇಲಿನ ಎಲ್ಲಾ ಕುಲಗಳಲ್ಲಿರುವ ಎಲ್ಲಾ ಜನರು ತಮ್ಮೊಳಗೆ ವ್ಯಾಜ್ಯವಾಡಿ--ನಮ್ಮ ಶತ್ರು ಗಳ ಕೈಯಿಂದ ನಮ್ಮನ್ನು ವಿಮೋಚನೆ ಮಾಡಿದವನು ಅರಸನೇ; ಫಿಲಿಷ್ಟಿಯರ ಕೈಯಿಂದ ನಮ್ಮನ್ನು ತಪ್ಪಿಸಿ ದವನೂ ಅವನೇ.

19:10b.2SA.019.010 ಆದರೆ ಈಗ ಅಬ್ಷಾಲೋಮನಿ ಗೋಸ್ಕರ ದೇಶವನ್ನು ಬಿಟ್ಟು ಓಡಿಹೋಗಿದ್ದಾನೆ. ನಮ್ಮನ್ನು ಆಳಲು ಅಭಿಷೇಕಿಸಲ್ಪಟ್ಟ ಅಬ್ಷಾಲೋಮನು ಯುದ್ಧದಲ್ಲಿ ಸತ್ತನು. ನಾವು ಈಗ ಅರಸನನ್ನು ತಿರಿಗಿ ಕರಕೊಂಡು ಬಾರದೆ ಸುಮ್ಮನೆ ಇರುವದು ಯಾಕೆ ಅಂದರು.

19:11b.2SA.019.011 ಅರಸನಾದ ದಾವೀದನು ಯಾಜಕರಾದ ಚಾದೋಕನ ಬಳಿಗೂ ಎಬ್ಯಾತಾರನ ಬಳಿಗೂ ಸೇವಕ ರನ್ನು ಕಳುಹಿಸಿ--ನೀವು ಯೆಹೂದದ ಹಿರಿಯರಿಗೆಎಲ್ಲಾ ಇಸ್ರಾಯೇಲಿನ ಮಾತು ಅರಸನಿಗೂ ಅವನ ಮನೆಗೂ ಬಂದಿರುವಾಗ ಅರಸನನ್ನು ಅವನ ಮನೆಗೆ ತಿರಿಗಿ ಕರಕೊಂಡು ಬರುವಂತೆ ನೀವು ಹಿಂಜರಿದ ದ್ದೇನು? ನೀವು ನನ್ನ ಸಹೋದರರೂ ನನ್ನ ಎಲುಬೂ ನನ್ನ ಮಾಂಸವೂ ಆಗಿದ್ದೀರಿ.

19:12b.2SA.019.012 ಹಾಗಾದರೆ ಅರಸನನ್ನು ತಿರಿಗಿ ಬರಮಾಡುವಂತೆ ನೀವು ಹಿಂಜರಿದದ್ದೇನು?

19:13b.2SA.019.013 ಇದಲ್ಲದೆ ನೀವು ಅಮಾಸನಿಗೆ--ನೀನು ನನ್ನ ಎಲುಬೂ ನನ್ನ ಮಾಂಸವೂ ಅಲ್ಲವೋ? ನೀನು ಯೋವಾಬನಿಗೆ ಬದಲಾಗಿ ಯಾವಾಗಲೂ ನನ್ನ ಮುಂದೆ ಸೈನ್ಯದ ಪ್ರಧಾನನಾಗಿರದೆ ಹೋದರೆ ದೇವರು ನನಗೆ ಹಾಗೆಯೇ ಮಾಡಲಿ ಎಂದು ಹೇಳಿರಿ ಅಂದನು.

19:14b.2SA.019.014 ಹಾಗೆಯೇ ಅವನು ಸಕಲ ಯೆಹೂದ ಜನರ ಹೃದಯವನ್ನು ಒಬ್ಬನ ಹೃದಯದ ಹಾಗೆ ಬೊಗ್ಗಿಸಿ ದ್ದರಿಂದ ಅವರು ಅರಸನಿಗೆ--ನೀನೂ ನಿನ್ನ ಎಲ್ಲಾ ಸೇವಕರೂ ತಿರಿಗಿ ಬನ್ನಿರಿ ಎಂದು ಹೇಳಿ ಕಳುಹಿಸಿದರು.

19:15b.2SA.019.015 ಅರಸನು ತಿರಿಗಿ ಯೊರ್ದನಿನ ವರೆಗೂ ಬಂದಾಗ ಯೆಹೂದದವರು ಅರಸನನ್ನು ಎದುರುಗೊಳ್ಳುವದಕ್ಕೆ ಹೋಗಿ, ಅರಸನು ಯೊರ್ದನನ್ನು ದಾಟುವ ಹಾಗೆ ಮಾಡುವದಕ್ಕೆ ಗಿಲ್ಗಾಲಿಗೆ ಬಂದರು.

19:16b.2SA.019.016 ಇದಲ್ಲದೆ ಬಹುರೀಮಿನವನೂ ಬೆನ್ಯಾವಿಾನ್ಯನೂ ಗೇರನ ಮಗನಾದ ಶಿಮ್ಮಿಯು ತ್ವರೆಯಾಗಿ ಯೆಹೂದ ಜನರ ಸಂಗಡ ಅರಸನಾದ ದಾವೀದನನ್ನು ಎದುರು ಗೊಳ್ಳುವದಕ್ಕೆ ಬಂದನು.

19:17b.2SA.019.017 ಅವನ ಸಂಗಡ ಸಾವಿರ ಮಂದಿ ಬೆನ್ಯಾವಿಾನ್ಯರಿದ್ದರು. ಸೌಲನ ಮನೆಯ ಸೇವಕ ನಾದ ಚೀಬನೂ ಅವನ ಸಂಗಡ ತನ್ನ ಹದಿನೈದು ಮಂದಿ ಕುಮಾರರೂ ತನ್ನ ಇಪ್ಪತ್ತು ಮಂದಿ ಸೇವಕರೂ ಯೊರ್ದನನ್ನು ದಾಟಿ ಅರಸನಿಗೆ ಎದುರಾಗಿ ಬಂದರು.

19:18b.2SA.019.018 ಅರಸನ ಮನೆಯವರನ್ನು ಈಚೆ ದಡಕ್ಕೆ ತರುವದಕ್ಕೂ ಅವನ ದೃಷ್ಟಿಗೆ ಒಳ್ಳೇದಾಗಿ ತೋರಿದ್ದನ್ನು ಮಾಡುವ ದಕ್ಕೂ ದೋಣಿಯು ಆಚೇ ದಡದಲ್ಲಿ ಬಂತು; ಆಗ ಗೇರನ ಮಗನಾದ ಶಿಮ್ಮಿಯು ಯೊರ್ದನನ್ನು ದಾಟು ತ್ತಲೇ ಅರಸನ ಮುಂದೆ ಬಿದ್ದು ಅರಸನಿಗೆ--

19:19b.2SA.019.019 ನನ್ನ ಒಡೆಯನೇ, ನನ್ನ ಅಕ್ರಮವನ್ನು ನನಗೆ ಎಣಿಸದೆ ಅರಸನಾದ ನನ್ನ ಒಡೆಯನು ಯೆರೂಸಲೇಮಿನಿಂದ ಹೊರಟು ಬರುವ ದಿವಸದಲ್ಲಿ ತನ್ನ ದಾಸನು ಮೂರ್ಖ ತನದಿಂದ ಮಾಡಿದ ಕಾರ್ಯವನ್ನು ನೆನಸದೆ ಅದನ್ನು ತನ್ನ ಹೃದಯದಲ್ಲಿ ಇಡದೆ ಇರಲಿ.

19:20b.2SA.019.020 ಯಾಕಂದರೆ ಪಾಪಮಾಡಿದೆನೆಂದು ನಿನ್ನ ಸೇವಕನಾಗಿರುವ ನಾನು ತಿಳಿದಿದ್ದೇನೆ. ಆದದರಿಂದ ಇಗೋ, ಅರಸನಾದ ನನ್ನ ಒಡೆಯನನ್ನು ಎದುರುಗೊಳ್ಳಲು ಯೋಸೇಫನ ಮನೆಯ ಎಲ್ಲರಿಗಿಂತ ಮುಂದಾಗಿ ಈ ದಿನ ಬಂದೆನು ಅಂದನು.

19:21b.2SA.019.021 ಆಗ ಚೆರೂಯಳ ಮಗನಾದ ಅಬೀ ಷೈಯು ಪ್ರತ್ಯುತ್ತರವಾಗಿ--ಕರ್ತನ ಅಭಿಷಿಕ್ತನನ್ನು ಶಿಮ್ಮಿಯು ಶಪಿಸಿದ್ದರಿಂದ ಅವನು ಅದಕ್ಕಾಗಿ ಕೊಲ್ಲಲ್ಪಡ ಬೇಕಲ್ಲವೋ ಅಂದನು.

19:22b.2SA.019.022 ಆದರೆ ದಾವೀದನು--ಚೆರೂಯಳ ಮಕ್ಕಳೇ, ಈಹೊತ್ತು ನೀವು ನನಗೆ ಶತ್ರುಗಳಾಗಿರುವ ಹಾಗೆ ನಿಮ್ಮೊಂದಿಗೆ ನನಗೆ ಏನು? ಈಹೊತ್ತು ಇಸ್ರಾಯೇಲಿನಲ್ಲಿ ಯಾವನಾದರೂ ಕೊಲೆಯಾಗಬಾರದು; ಯಾಕಂದರೆ ಈಹೊತ್ತು ನಾನು ಇಸ್ರಾಯೇಲಿನ ಮೇಲೆ ಅರಸನಾಗಿದ್ದೇನೆಂದು ನಾನು ತಿಳಿಯುತ್ತೇನಲ್ಲಾ ಅಂದನು.

19:23b.2SA.019.023 ಆಗ ಅರಸನು ಶಿಮ್ಮಿಗೆ --ನೀನು ಸಾಯುವದಿಲ್ಲ ಅಂದನು. ಇದಲ್ಲದೆ ಅರಸನು ಅವನಿಗೆ ಆಣೆ ಇಟ್ಟನು.

19:24b.2SA.019.024 ಸೌಲನ ಮಗನಾದ ಮೆಫೀಬೋಶೆತನು ಅರಸ ನನ್ನು ಎದುರುಗೊಳ್ಳಲು ಬಂದನು. ಅರಸನು ಹೋದಂದಿನಿಂದ ಅವನು ಮರಳಿ ಸಮಾಧಾನವಾಗಿ ಬರುವ ವರೆಗೂ ಅವನು ತನ್ನ ಪಾದಗಳನ್ನು ಕಟ್ಟಿ ಕೊಳ್ಳಲಿಲ್ಲ, ತನ್ನ ಗಡ್ಡವನ್ನು ಕತ್ತರಿಸಿಕೊಳ್ಳಲಿಲ್ಲ; ತನ್ನ ಬಟ್ಟೆಗಳನ್ನು ಒಗೆದುಕೊಳ್ಳಲಿಲ್ಲ.

19:25b.2SA.019.025 ಅವನು ಯೆರೂಸಲೇಮಿನಿಂದ ಅರಸನನ್ನು ಎದುರುಗೊಳ್ಳಲು ಬಂದಾಗ ಅರಸನು ಅವನಿಗೆ--ಮೆಫೀಬೋಶೆತನೇ, ನೀನು ಯಾಕೆ ನನ್ನ ಸಂಗಡ ಬಾರದೆಹೋದಿ ಅಂದನು.

19:26b.2SA.019.026 ಅದಕ್ಕವನು--ಅರಸನಾದ ನನ್ನ ಒಡೆಯನೇ, ನನ್ನ ಸೇವಕನು ನನ್ನನ್ನು ಮೋಸ ಮಾಡಿದನು. ಯಾಕಂದರೆ ನಿನ್ನ ಸೇವಕನು ಕುಂಟನಾಗಿರುವದರಿಂದ ಒಂದು ಕತ್ತೆಯ ಮೇಲೆ ತಡಿಯನ್ನು ಹಾಕು ಅದರ ಮೇಲೇರಿ ಅರಸನ ಸಂಗಡ ಹೋಗುವೆನೆಂದು ನಿನ್ನ ಸೇವಕನಾದ ನಾನು ಅವನಿಗೆ ಹೇಳಿದೆನು.

19:27b.2SA.019.027 ಅವನು ಅರಸನಾದ ನನ್ನ ಒಡೆಯನಿಗೆ ನಿನ್ನ ಸೇವಕನ ಮೇಲೆ ಚಾಡಿಯನ್ನು ಹೇಳಿದನು. ಆದರೆ ಅರಸನಾದ ನನ್ನ ಒಡೆಯನು ದೇವದೂತನ ಹಾಗೆಯೇ ಇದ್ದಾನೆ.

19:28b.2SA.019.028 ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ಮಾಡು. ಅರಸನಾದ ನನ್ನ ಒಡೆಯನಿಗೆ ನನ್ನ ತಂದೆಯ ಮನೆಯವರೆಲ್ಲರು ಸತ್ತ ವರ ಹಾಗೆ ಇದ್ದಾಗ್ಯೂ ನಿನ್ನ ಮೇಜಿನಲ್ಲಿ ಭೋಜನ ಮಾಡುವವರೊಳಗೆ ನಿನ್ನ ಸೇವಕನನ್ನು ಇಟ್ಟಿ. ನಾನು ಇನ್ನು ಅರಸನಿಗೆ ಹೆಚ್ಚು ಮೊರೆಯಿಡುವದಕ್ಕೆ ಯೋಗ್ಯನೋ ಅಂದನು. ಆಗ ಅರಸನು ಅವನಿಗೆಇನ್ನು ನಿನ್ನ ಕಾರ್ಯಗಳನ್ನು ಕುರಿತು ಮಾತನಾಡು ವದೇನು?

19:29b.2SA.019.029 ನೀನೂ ಚೀಬನೂ ಭೂಮಿಯಲ್ಲಿ ಪಾಲು ಹಂಚಿಕೊಳ್ಳಿರಿ ಎಂದು ಹೇಳಿದ್ದೇನೆ ಅಂದನು.

19:30b.2SA.019.030 ಮೆಫೀಬೋಶೆತನು ಅರಸನಿಗೆ--ಹೌದು, ಅರಸ ನಾದ ನನ್ನ ಒಡೆಯನು ಸಮಾಧಾನದಿಂದ ತಿರಿಗಿ ತನ್ನ ಮನೆಗೆ ಬಂದದ್ದೇ ಸಾಕು. ಅವನೇ ಎಲ್ಲವನ್ನು ತಕ್ಕೊಳ್ಳಲಿ ಅಂದನು.

19:31b.2SA.019.031 ಇದಲ್ಲದೆ ಗಿಲ್ಯಾದ್ಯನಾದ ಬರ್ಜಿಲ್ಲೈಯು ಅರಸ ನನ್ನು ಎನ್‌ರೋಗೆಲೀಮಿನಿಂದ ಯೊರ್ದನನ್ನು ದಾಟಿ ಸಲು ಬಂದನು. ಈ ಬರ್ಜಿಲ್ಲೈಯು ಎಂಭತ್ತು ವರುಷ ದವನಾಗಿ ಮಹಾವೃದ್ಧನಾಗಿದ್ದನು.

19:32b.2SA.019.032 ಅರಸನು ಮಹನ ಯಿಮಿನಲ್ಲಿ ವಾಸಿಸಿರುವ ವರೆಗೂ ಇವನು ಅವನನ್ನು ಸಂರಕ್ಷಿಸಿದನು; ಯಾಕಂದರೆ ಅವನು ಮಹಾ ದೊಡ್ಡ ಮನುಷ್ಯನಾಗಿದ್ದನು.

19:33b.2SA.019.033 ಆದದರಿಂದ ಅರಸನು ಬರ್ಜಿಲ್ಲೈಗೆ--ನೀನು ನನ್ನ ಸಂಗಡ ಬಾ, ಯೆರೂಸ ಲೇಮಿನಲ್ಲಿ ನಿನ್ನನ್ನು ನನ್ನ ಬಳಿಯಲ್ಲಿ ಸಂರಕ್ಷಿಸುವೆನು ಅಂದನು.

19:34b.2SA.019.034 ಆದರೆ ಬರ್ಜಿಲ್ಲೈಯು ಅರಸನಿಗೆ--ನಾನು ಅರಸನ ಸಂಗಡ ಯೆರೂಸಲೇಮಿಗೆ ಹೋಗುವ ಹಾಗೆ ನಾನು ಬದುಕುವ ವರುಷ ಎಷ್ಟು ಉಂಟು?

19:35b.2SA.019.035 ನಾನು ಈಹೊತ್ತು ಎಂಭತ್ತು ವರುಷದವನು; ಇನ್ನು ಒಳ್ಳೇದು ಕೆಟ್ಟದ್ದು ಎಂಬ ಭೇದ ತಿಳಿಯುವೆನೋ? ತಿನ್ನುವದೂ ಕುಡಿಯುವದೂ ನಿನ್ನ ಸೇವಕನಿಗೆ ರುಚಿಕರ ವಾಗಿರುವದೋ? ಸಂಗೀತಗಾರರ ಸಂಗೀತಗಾರ್ತಿ ಯರ ಶಬ್ದವನ್ನು ಇನ್ನು ಕೇಳುವೆನೋ? ಹಾಗಾದರೆ ನಿನ್ನ ಸೇವಕನು ಅರಸನಾದ ನನ್ನ ಒಡೆಯನಿಗೆ ಯಾಕೆ ಇನ್ನು ಭಾರವಾಗಿರಬೇಕು?

19:36b.2SA.019.036 ನಿನ್ನ ಸೇವಕನು ಸ್ವಲ್ಪ ದೂರ ಯೊರ್ದನನ್ನು ದಾಟುವ ವರೆಗೂ ಅರಸನ ಸಂಗಡ ಬರುವನು; ಅದಕ್ಕೆ ಇಂಥಾ ಬಹುಮಾನ ಕೊಡುವದೇನು?

19:37b.2SA.019.037 ಅಪ್ಪಣೆ ಆದರೆ ನಿನ್ನ ಸೇವಕನಾದ ನಾನು ತಿರಿಗಿ ಹೋಗಿ ನನ್ನ ಪಟ್ಟಣದಲ್ಲಿ ನನ್ನ ತಂದೆ ತಾಯಿಗಳ ಸಮಾಧಿಯ ಬಳಿಯಲ್ಲಿ ಸಾಯುತ್ತೇನೆ. ಆದರೆ ಅರಸನಾದ ನನ್ನ ಒಡೆಯನ ಸಂಗಡ ಇಗೋ, ನಿನ್ನ ಸೇವಕನಾದ ಕಿಮ್ಹಾಮನು ಬರುವನು; ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ಅವನಿಗೆ ಮಾಡು ಅಂದನು.

19:38b.2SA.019.038 ಅರಸನು--ಕಿಮ್ಹಾಮನು ನನ್ನ ಸಂಗಡ ಬರಲಿ; ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ನಾನು ಅವನಿಗೆ ಮಾಡುವೆನು; ನಿನಗೆ ನನ್ನಿಂದ ಬೇಕಾದದ್ದೆಲ್ಲಾ ಮಾಡುವೆನು ಅಂದನು.

19:39b.2SA.019.039 ಜನರೆಲ್ಲರು ಯೊರ್ದನನ್ನು ದಾಟಿದರು. ಅರಸನು ದಾಟಿ ಬಂದಾಗ ಬರ್ಜಿಲ್ಲೈ ಯನ್ನು ಮುದ್ದಿಟ್ಟು ಅವನನ್ನು ಆಶೀರ್ವದಿಸಿದನು.

19:40b.2SA.019.040 ಆಗ ಅವನು ತನ್ನ ಸ್ಥಳಕ್ಕೆ ಹಿಂತಿರುಗಿದನು. ಅರಸನು ಗಿಲ್ಗಾಲಿಗೆ ತೆರಳಿದನು; ಹಾಗೆಯೇ ಅವನ ಸಂಗಡ ಕಿಮ್ಹಾಮನು ತೆರಳಿದನು; ಯೆಹೂದದ ಜನರೆಲ್ಲರೂ ಇಸ್ರಾಯೇಲಿನ ಅರ್ಧ ಪಾಲು ಜನರೂ ಅರಸನನ್ನು ಕರಕೊಂಡು ಹೋದರು.

19:41b.2SA.019.041 ಇಗೋ, ಇಸ್ರಾಯೇಲ್‌ ಜನರೆಲ್ಲರೂ ಅರಸನ ಬಳಿಗೆ ಬಂದು ಅರಸನಿಗೆ--ನಮ್ಮ ಸಹೋದರರಾದ ಯೆಹೂದ ಜನರು ಕಳ್ಳತನವಾಗಿ ನಿನ್ನನ್ನು ಕರ ತಂದದ್ದೇನು? ಅರಸನನ್ನೂ ಅವನ ಮನೆಯವರನ್ನೂ ಅವನ ಸಂಗಡ ಇರುವ ದಾವೀದನ ಎಲ್ಲಾ ಜನರನ್ನೂ ಯೊರ್ದನನ್ನು ದಾಟಿಸಿದ್ದೇನು ಅಂದರು.

19:42b.2SA.019.042 ಆಗ ಯೆಹೂದ ಜನರೆಲ್ಲರೂ ಇಸ್ರಾಯೇಲ್‌ ಜನರಿಗೆ ಪ್ರತ್ಯುತ್ತರವಾಗಿ--ಅರಸನು ನಮಗೆ ಸವಿಾಪ ಬಂಧು ವಾದದರಿಂದ; ಈ ಕಾರ್ಯಕ್ಕೋಸ್ಕರ ನೀವು ಕೋಪ ವಾಗಿರುವದೇನು? ನಾವು ಅರಸನ ಖರ್ಚಿನಿಂದ ಏನಾದರೂ ಊಟ ಮಾಡಿದೆವೋ? ಅವನು ನಮಗೆ ಏನಾದರೂ ಕೊಟ್ಟನೋ ಅಂದರು.ಆದರೆ ಇಸ್ರಾ ಯೇಲ್‌ ಜನರು ಯೆಹೂದ ಜನರಿಗೆ ಪ್ರತ್ಯುತ್ತರ ವಾಗಿ--ಅರಸನಲ್ಲಿ ನಮಗೆ ಹತ್ತು ಪಾಲುಂಟು; ನಿಮಗಿಂತ ನಮಗೆ ದಾವೀದನ ಬಾಧ್ಯತೆಯು ಅಧಿಕವಾಗಿದೆ. ನಮ್ಮ ಅರಸನನ್ನು ತಿರಿಗಿ ಕರಕೊಂಡು ಬರುವದರ ವಿಷಯದಲ್ಲಿ ಮೊದಲು ಮಾತನಾಡಿ ದವರು ನಾವಲ್ಲವೋ? ಹಾಗಾದರೆ ನಮ್ಮನ್ನು ಯಾಕೆ ಅಲ್ಪವಾಗಿ ಎಣಿಸಿದಿರಿ ಅಂದರು. ಆದರೆ ಇಸ್ರಾಯೇಲ್‌ ಜನರ ಮಾತುಗಳಿಗಿಂತ ಯೆಹೂದ ಜನರ ಮಾತುಗಳು ಕಠಿಣವಾಗಿದ್ದವು.

19:43b.2SA.019.043 ಆದರೆ ಇಸ್ರಾ ಯೇಲ್‌ ಜನರು ಯೆಹೂದ ಜನರಿಗೆ ಪ್ರತ್ಯುತ್ತರ ವಾಗಿ--ಅರಸನಲ್ಲಿ ನಮಗೆ ಹತ್ತು ಪಾಲುಂಟು; ನಿಮಗಿಂತ ನಮಗೆ ದಾವೀದನ ಬಾಧ್ಯತೆಯು ಅಧಿಕವಾಗಿದೆ. ನಮ್ಮ ಅರಸನನ್ನು ತಿರಿಗಿ ಕರಕೊಂಡು ಬರುವದರ ವಿಷಯದಲ್ಲಿ ಮೊದಲು ಮಾತನಾಡಿ ದವರು ನಾವಲ್ಲವೋ? ಹಾಗಾದರೆ ನಮ್ಮನ್ನು ಯಾಕೆ ಅಲ್ಪವಾಗಿ ಎಣಿಸಿದಿರಿ ಅಂದರು. ಆದರೆ ಇಸ್ರಾಯೇಲ್‌ ಜನರ ಮಾತುಗಳಿಗಿಂತ ಯೆಹೂದ ಜನರ ಮಾತುಗಳು ಕಠಿಣವಾಗಿದ್ದವು.

20

20:1b.2SA.020.001 ಬೆನ್ಯಾವಿಾನನ ಕುಲದವನಾದ ಬಿಕ್ರೀಯಮಗನಾಗಿರುವ ಶೆಬನೆಂಬ ಹೆಸರುಳ್ಳ ಬೆಲಿಯಾಳನವನಾದ ಒಬ್ಬನು ಅಲ್ಲಿದ್ದನು. ಅವನು ತುತೂರಿಯನ್ನು ಊದಿ--ನಮಗೆ ದಾವೀದನಲ್ಲಿ ಪಾಲಿಲ್ಲ; ಇಷಯನ ಮಗನಲ್ಲಿ ನಮಗೆ ಬಾಧ್ಯತೆಯೂ ಇಲ್ಲ. ಓ ಇಸ್ರಾಯೇಲ್ಯರೇ, ನಿಮ್ಮ ನಿಮ್ಮ ಗುಡಾರಗಳಿಗೆ ಹೋಗಿರಿ ಅಂದನು.

20:2b.2SA.020.002 ಇಸ್ರಾಯೇಲ್‌ ಜನರೆಲ್ಲರು ದಾವೀದನನ್ನು ಬಿಟ್ಟು ಸರಿದು ಬಿಕ್ರೀಯ ಮಗನಾದ ಶೆಬನ ಹಿಂದೆ ಹೋದರು. ಆದರೆ ಯೊರ್ದನಿನಿಂದ ಯೆರೂಸಲೇಮಿನ ವರೆಗೂ ಇರುವ ಯೆಹೂದ ಜನರು ತಮ್ಮ ಅರಸನನ್ನು ಅಂಟಿಕೊಂಡಿದ್ದರು.

20:3b.2SA.020.003 ದಾವೀದನು ಯೆರೂಸಲೇಮಿನಲ್ಲಿರುವ ತನ್ನ ಮನೆಗೆ ಬಂದನು; ಅರಸನು ಮನೆಯಲ್ಲಿ ಕಾಯಲಿಟ್ಟ ಉಪಪತ್ನಿಗಳಾದ ಹತ್ತುಮಂದಿ ಸ್ತ್ರೀಯರನ್ನು ತೆಗೆದು ಕೊಂಡು ಅವರನ್ನು ಒಂದು ಕಾವಲಿನಲ್ಲಿ ಇರಿಸಿ ಸಾಕುತ್ತಿದ್ದನು. ಆದರೆ ಅವರನ್ನು ತಿರುಗಿ ಕೂಡಲಿಲ್ಲ. ಹಾಗೆಯೇ ಅವರು ಸಾಯುವ ದಿವಸದ ವರೆಗೂ ಕಾವಲಲ್ಲಿ ಇರಿಸಲ್ಪಟ್ಟು ವಿಧವೆಯರ ಹಾಗೆಯೇ ಬದುಕಿದರು.

20:4b.2SA.020.004 ಅರಸನು ಅಮಾಸನಿಗೆ--ನೀನು ಮೂರು ದಿವಸ ಗಳೊಳಗೆ ಯೆಹೂದ ಜನರನ್ನು ಕೂಡಿಸಿಕೊಂಡು ಇಲ್ಲಿ ಇರು ಅಂದನು.

20:5b.2SA.020.005 ಹಾಗೆಯೇ ಅಮಾಸನು ಯೆಹೂದದ ಜನರನ್ನು ಕೂಡಿಸಲು ಹೋದನು; ಆದರೆ ಅವನು ತನಗೆ ನೇಮಿಸಿದ ಕಾಲದಲ್ಲಿ ಬಾರದೆ ಆಲಸ್ಯ ಮಾಡಿದನು.

20:6b.2SA.020.006 ಆದದರಿಂದ ದಾವೀದನು ಅಬೀಷೈಗೆಈಗ ಅಬ್ಷಾಲೋಮನಿಗಿಂತ ಬಿಕ್ರಿಯ ಮಗನಾದ ಶೆಬನು ನಮಗೆ ಹೆಚ್ಚಿನ ಕೇಡನ್ನು ಮಾಡುವನು. ಅವನು ತನಗೆ ಗಡಿ ಸ್ಥಳಗಳಾದ ಪಟ್ಟಣಗಳನ್ನು ಸಂಪಾ ದಿಸಿಕೊಂಡು ನಮ್ಮಿಂದ ತಪ್ಪಿಸಿಕೊಳ್ಳದ ಹಾಗೆ ನೀನು ನಿನ್ನ ಯಜಮಾನನ ಸೇವಕರನ್ನು ತಕ್ಕೊಂಡು ಹೊರಟು ಅವನನ್ನು ಹಿಂದಟ್ಟು ಅಂದನು.

20:7b.2SA.020.007 ಹಾಗೆಯೇ ಅವನ ಹಿಂದೆ ಯೋವಾಬನ ಜನರೂ ಕೆರೇತ್ಯರೂ ಪೆಲೇ ತ್ಯರೂ ಎಲ್ಲಾ ಪರಾಕ್ರಮಶಾಲಿಗಳೂ ಬಿಕ್ರಿಯ ಮಗ ನಾದ ಶೆಬನನ್ನು ಹಿಂದಟ್ಟಲು ಯೆರೂಸಲೇಮಿನಿಂದ ಹೊರಟರು.

20:8b.2SA.020.008 ಅವರು ಗಿಬ್ಯದ ಸವಿಾಪದಲ್ಲಿರುವ ದೊಡ್ಡಕಲ್ಲಿನ ಬಳಿಗೆ ಬಂದಾಗ ಅಮಾಸನು ಅವರ ಮುಂದೆ ಹೋದನು. ಆದರೆ ಯೋವಾಬನು ತಾನು ತೊಟ್ಟು ಕೊಂಡಿರುವ ಅಂಗಿಯ ಮೇಲೆ ಒಂದು ನಡು ಕಟ್ಟನ್ನು ಕಟ್ಟಿಕೊಂಡಿದ್ದನು. ಅದರಲ್ಲಿ ಒರೆಯ ಸಂಗಡ ಒಂದು ಕತ್ತಿಯು ಅವನ ನಡುವಿನಲ್ಲಿ ತೂಗುತ್ತಿತ್ತು. ಅವನು ನಡೆಯುವಾಗ ಅದು ಬಿತ್ತು.

20:9b.2SA.020.009 ಆಗ ಯೋವಾಬನು ಅಮಾಸನಿಗೆ--ನನ್ನ ಸಹೋದರನೇ, ಕ್ಷೇಮವೋ ಅಂದನು. ಯೋವಾಬನು ಮುದ್ದಿಡುವುದಕ್ಕೋಸ್ಕರ ತನ್ನ ಬಲಗೈಯಿಂದ ಅವನ ಗಡ್ಡವನ್ನು ಹಿಡಿದನು. ಆದರೆ ಅಮಾಸನು ಯೋವಾಬನ ಕೈಯಲ್ಲಿದ್ದ ಕತ್ತಿ ಯನ್ನು ಗಮನಿಸದಿದ್ದಾಗ ಯೋವಾಬನು ಅವನನ್ನು ಕರುಳುಗಳು ಹೊರಬರುವ ಹಾಗೆ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ತಿವಿದನು.

20:10b.2SA.020.010 ಎರಡನೇ ಸಾರಿ ಹೊಡೆಯಲಿಲ್ಲ, ಅವನು ಸತ್ತನು. ಯೋವಾಬನೂ ಅವನ ಸಹೋದರನಾದ ಅಬೀಷೈಯೂ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟಿದರು.

20:11b.2SA.020.011 ಯೋವಾಬನ ಜನರಲ್ಲಿ ಒಬ್ಬನು ಸತ್ತವನ ಬಳಿಯಲ್ಲಿ ನಿಂತು--ಯಾವನು ಯೋವಾಬನ ಮೇಲೆ ಇಷ್ಟವುಳ್ಳವನೋ ಯಾವನು ದಾವೀದನಿಗೆ ಹೊಂದಿದವನೋ ಅವನು ಯೋವಾಬನ ಹಿಂದೆ ಹೋಗಲಿ ಅಂದನು.

20:12b.2SA.020.012 ಆದರೆ ಅಮಾಸನು ರಾಜ ಮಾರ್ಗದ ಮಧ್ಯದಲ್ಲಿ ರಕ್ತದೊಳಗೆ ಹೊರಳಾಡುತ್ತಾ ಇದ್ದನು. ಜನರೆಲ್ಲರು ನಿಂತಿರುವದನ್ನು ಆ ಮನುಷ್ಯನು ಕಂಡಾಗ ಅವನು ಅಮಾಸನನ್ನು ದಾರಿಯಿಂದ ಹೊಲಕ್ಕೆ ಎಳೆದು ಅವನ ಮೇಲೆ ಒಂದು ವಸ್ತ್ರವನ್ನು ಹಾಕಿದನು.

20:13b.2SA.020.013 ಅವನು ರಾಜ ಮಾರ್ಗ ದಿಂದ ಎಳೆದು ಹಾಕಲ್ಪಟ್ಟ ತರುವಾಯ ಜನರೆಲ್ಲರೂ ಮುಂದಕ್ಕೆ ಹೋಗಿ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟಿ ಯೋವಾಬನ ಹಿಂದೆ ಹೋದರು.

20:14b.2SA.020.014 ಅವನು ಇಸ್ರಾಯೇಲಿನ ಎಲ್ಲಾ ಗೋತ್ರಗಳಲ್ಲಿ ಹಾದು ಆಬೇಲ್ಬೇತ್ಮಾಕಾ ಮಟ್ಟಿಗೂ ಎಲ್ಲಾ ಬೇರಿಯ ಬಳಿಗೂ ಹೋದನು. ಆಗ ಅವರು ಕೂಡಿಕೊಂಡು ಅವನ ಸಂಗಡ ಹೋದರು.

20:15b.2SA.020.015 ಅವರು ಬಂದು ಅವನು ಇದ್ದ ಆಬೇಲ್ಬೇತ್ಮಾಕನ್ನು ಮುತ್ತಿಗೆ ಹಾಕಿ ಪಟ್ಟಣಕ್ಕೆದುರಾಗಿ ಕಂದಕದ ಗುಡ್ಡೆಯವರೆಗೆ ಮಣ್ಣಿನ ದಿಬ್ಬವನ್ನು ಹಾಕಿದರು. ಯೋವಾಬನ ಸಂಗಡಲಿರುವ ಜನರೆಲ್ಲರೂ ಗೋಡೆಯನ್ನು ಕೆಡವುವದಕ್ಕೆ ಹೊಡೆ ದರು.

20:16b.2SA.020.016 ಆಗ ಜ್ಞಾನವುಳ್ಳ ಒಬ್ಬ ಸ್ತ್ರೀಯು ಪಟ್ಟಣದಲ್ಲಿಂದ--ಕೇಳಿರಿ, ಕೇಳಿರಿ, ನಾನು ಯೋವಾಬನ ಸಂಗಡ ಮಾತನಾಡುವ ಹಾಗೆ ಅವನು ಇಲ್ಲಿಗೆ ಸವಿಾಪಿ ಸಲು ಬರಹೇಳಿರಿ ಎಂದು ಕೂಗಿ ಬೇಡಿಕೊಂಡಳು.

20:17b.2SA.020.017 ಅವನು ಸವಿಾಪ ಬಂದಾಗ ಆ ಸ್ತ್ರೀಯು--ನೀನು ಯೋವಾಬನೋ ಅಂದಳು. ಅವನು--ನಾನೇ ಅಂದನು. ಅವಳು ಅವನಿಗೆ--ನಿನ್ನ ಸೇವಕಳ ಮಾತು ಗಳನ್ನು ಕೇಳು ಅಂದಳು. ಅವನು--ನಾನು ಕೇಳುತ್ತೇನೆ ಅಂದನು.

20:18b.2SA.020.018 ಆಗ ಅವಳು ಮಾತನಾಡಿ--ಪೂರ್ವ ದಲ್ಲಿ ಮಾತನಾಡುವ ಮಾತು ಏನಂದರೆ, ಅವರು ಆಬೇಲಿನಲ್ಲಿ ನಿಶ್ಚಯವಾಗಿ ಕೇಳಿ ಹಾಗೆಯೇ ಕಾರ್ಯ ತೀರಿಸಿಕೊಳ್ಳುವರು.

20:19b.2SA.020.019 ನಾನು ಇಸ್ರಾಯೇಲಿನ ಸಮಾ ಧಾನವುಳ್ಳವರಲ್ಲಿಯೂ ನಂಬಿಗಸ್ತರಲ್ಲಿಯೂ ಒಬ್ಬ ಳಾಗಿದ್ದೇನೆ. ನೀನು ಇಸ್ರಾಯೇಲಿನಲ್ಲಿ ತಾಯಿಯಂತಿ ರುವ ಈ ಪಟ್ಟಣವನ್ನು ನಾಶಮಾಡಲು ಹುಡುಕುತ್ತೀ. ನೀನು ಕರ್ತನ ಬಾಧ್ಯತೆಯನ್ನು ನುಂಗುವದೇಕೆ ಅಂದಳು.

20:20b.2SA.020.020 ಅದಕ್ಕೆ ಯೋವಾಬನು ಪ್ರತ್ಯುತ್ತರವಾಗಿ--ನನಗೆ ಅದು ದೂರವಾಗಿರಲಿ, ನುಂಗುವದೂ ಕೆಡಿಸುವದೂ ನನಗೆ ದೂರವಾಗಿರಲಿ.

20:21b.2SA.020.021 ಕಾರ್ಯವು ಹಾಗಲ್ಲ; ಬಿಕ್ರೀಯ ಮಗನಾದ ಶೆಬನೆಂಬ ಹೆಸರುಳ್ಳ ಎಫ್ರಾಯಾಮ್‌ ಬೆಟ್ಟದವನಾದ ಒಬ್ಬ ಮನುಷ್ಯನು ಅರಸನಾದ ದಾವೀದನಿಗೆ ವಿರೋಧವಾಗಿ ತನ್ನ ಕೈಯನ್ನು ಎತ್ತಿದ್ದಾನೆ. ನೀವು ಅವನೊಬ್ಬನನ್ನೇ ಒಪ್ಪಿಸಿಕೊಡಿರಿ; ಆಗ ನಾನು ಪಟ್ಟಣವನ್ನು ಬಿಟ್ಟು ಹೋಗುವೆನು ಅಂದನು. ಆ ಸ್ತ್ರೀಯು ಯೋವಾಬನಿಗೆ--ಇಗೋ, ಅವನ ತಲೆಯು ಗೋಡೆಯ ಮೇಲಿನಿಂದ ನಿನ್ನ ಬಳಿಗೆ ಹಾಕಲ್ಪಡುವದು ಅಂದಳು.

20:22b.2SA.020.022 ಆ ಸ್ತ್ರೀಯು ತನ್ನ ಜ್ಞಾನದಿಂದ ಎಲ್ಲಾ ಜನರ ಬಳಿಗೆ ಹೋದಳು. ಆಗ ಅವರು ಬಿಕ್ರೀಯ ಮಗನಾದ ಶೆಬನ ತಲೆಯನ್ನು ಕಡಿದು ಯೋವಾಬನ ಬಳಿಗೆ ಹಾಕಿದರು. ಅವನು ತುತೂರಿಯನ್ನು ಊದಿದ್ದರಿಂದ ಅವರು ಪಟ್ಟಣದಿಂದ ಚದರಿ ಪ್ರತಿ ಮನುಷ್ಯನು ತನ್ನ ತನ್ನ ಡೇರೆಗೆ ಹೋದನು. ಯೋವಾಬನು ಯೆರೂಸಲೇಮಿನಲ್ಲಿರುವ ಅರಸನ ಬಳಿಗೆ ಹಿಂತಿರುಗಿ ಬಂದನು.

20:23b.2SA.020.023 ಯೋವಾಬನು ಇಸ್ರಾಯೇಲ್ಯರ ಮುಖ್ಯ ಸೇನಾ ಪತಿಯಾಗಿದ್ದನು; ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಅಧಿಪತಿಯಾಗಿದ್ದನು;

20:24b.2SA.020.024 ಅದೋ ರಾಮನು ಗುತ್ತಿಗೆಯ ಹಣದ ಮೇಲೆ ಅಧಿಕಾರಿ ಯಾಗಿದ್ದನು; ಅಹೀಲೂದನ ಮಗನಾದ ಯೆಹೋಷಾ ಫಾಟನು ದಂಡಾಧಿಕಾರಿಯಾಗಿದ್ದನು;

20:25b.2SA.020.025 ಶೆವನು ಶಾಸ್ತ್ರಿಯಾಗಿದ್ದನು. ಚಾದೋಕನೂ ಎಬ್ಯಾತಾರನೂ ಯಾಜಕರಾಗಿದ್ದರು;ಯಾಯಾರಿನವನಾದ ಈರನೂ ದಾವೀದನ ಬಳಿಯಲ್ಲಿ ಮುಖ್ಯ ಅಧಿಪತಿಯಾಗಿದ್ದನು.

20:26b.2SA.020.026 ಯಾಯಾರಿನವನಾದ ಈರನೂ ದಾವೀದನ ಬಳಿಯಲ್ಲಿ ಮುಖ್ಯ ಅಧಿಪತಿಯಾಗಿದ್ದನು.

21

21:1b.2SA.021.001 ದಾವೀದನ ದಿವಸಗಳಲ್ಲಿ ವರುಷದಿಂದ ವರುಷಕ್ಕೆ ಮೂರು ವರುಷ ಬರ ಉಂಟಾ ಗಿತ್ತು. ಆಗ ದಾವೀದನು ಕರ್ತನನ್ನು ವಿಚಾರಿಸಿದನು. ಕರ್ತನು--ಸೌಲನು ಗಿಬ್ಯೋನ್ಯರನ್ನು ಕೊಂದುಹಾಕಿ ದ್ದರಿಂದ ಅವನಿಗೋಸ್ಕರವೂ ರಕ್ತಾಪರಾಧವುಳ್ಳ ಅವನ ಮನೆಗೋಸ್ಕರವೂ ಇದಾಗಿದೆ ಎಂದು ಹೇಳಿದನು.

21:2b.2SA.021.002 ಆಗ ಅರಸನು ಗಿಬ್ಯೋನ್ಯರನ್ನು ಕಳುಹಿಸಿದನು. (ಆದರೆ ಗಿಬ್ಯೋನ್ಯರು ಇಸ್ರಾಯೇಲ್‌ ಮಕ್ಕಳಾಗಿರದೆ ಅಮೋರಿಯರಲ್ಲಿ ಉಳಿದವರಾಗಿದ್ದರು. ಅವರಿಗೆ ಇಸ್ರಾಯೇಲ್‌ ಮಕ್ಕಳು ಆಣೆ ಇಟ್ಟಿದ್ದರು. ಸೌಲನು ಇಸ್ರಾಯೇಲ್‌ ಮಕ್ಕಳಿಗೋಸ್ಕರವಾಗಿಯೂ ಯೆಹೂದ ಕ್ಕೋಸ್ಕರವಾಗಿಯೂ ತೋರಿಸಿದ ಆಸಕ್ತಿಯಿಂದ ಅವ ರನ್ನು ಹೊಡೆಯಲು ಹುಡುಕಿದ್ದನು)

21:3b.2SA.021.003 ಆದದರಿಂದ ದಾವೀದನು ಗಿಬ್ಯೋನ್ಯರಿಗೆ--ನಾನು ನಿಮಗೆ ಮಾಡ ಬೇಕಾದದ್ದೇನು? ನೀವು ಕರ್ತನ ಬಾಧ್ಯತೆಯನ್ನು ಆಶೀರ್ವದಿಸುವ ಹಾಗೆ ನಾನು ಯಾವದರಿಂದ ಪ್ರಾಯಶ್ಚಿತ್ತ ಮಾಡಲಿ ಎಂದು ಕೇಳಿದನು.

21:4b.2SA.021.004 ಆಗ ಗಿಬ್ಯೋನ್ಯರು ಅವನಿಗೆ--ಸೌಲನ ಕೈಯಿಂದಲಾದರೂ ಅವನ ಮನೆ ಯವರ ಕೈಯಿಂದಲಾದರೂ ನಮಗೆ ಬೆಳ್ಳಿಯಾದರೂ ಬಂಗಾರವಾದರೂ ಬೇಡ; ನೀನು ಈ ಕಾರ್ಯಕ್ಕೋಸ್ಕರ ಇಸ್ರಾಯೇಲಿನಲ್ಲಿ ಒಬ್ಬನನ್ನಾದರೂ ಕೊಂದುಹಾಕ ಬೇಕೆಂಬುವದು ನಮಗೆ ಅಗತ್ಯವಿಲ್ಲ ಅಂದರು. ಆಗ ಅವನು--ನೀವು ನನಗೆ ಏನು ಹೇಳುತ್ತೀರೋ ನಾನು ನಿಮಗೆ ಮಾಡುವೆನು ಅಂದನು.

21:5b.2SA.021.005 ಅವರು ಅರಸನಿಗೆಯಾವನು ನಮ್ಮನ್ನು ಸಂಹರಿಸಿಬಿಟ್ಟು ನಾವು ಇಸ್ರಾ ಯೇಲಿನ ಎಲ್ಲಾ ಮೇರೆಗಳೊಳಗೆ ನಿಲ್ಲದೆ ನಾಶವಾಗುವ ಹಾಗೆ

21:6b.2SA.021.006 ನಮಗೆ ಕೇಡುಮಾಡಲು ನೆನಸಿದನೋ ಅವನ ಕುಮಾರರಲ್ಲಿ ಏಳು ಮಂದಿ ನಮಗೆ ಒಪ್ಪಿಸಲ್ಪಡಲಿ. ಆಗ ನಾವು ಕರ್ತನು ಆದುಕೊಂಡ ಸೌಲನ ಊರಾದ ಗಿಬೆಯದಲ್ಲಿ ಅವರನ್ನು ಕರ್ತನಿಗೋಸ್ಕರ ಗಲ್ಲಿಗೆ ಹಾಕು ವೆವು ಅಂದರು. ಅದಕ್ಕೆ ಅರಸನು--ನಾನು ಒಪ್ಪಿಸಿ ಕೊಡುವೆನು ಅಂದನು.

21:7b.2SA.021.007 ಆದರೆ ತಮಗೂ ದಾವೀದ ನಿಗೂ ಸೌಲನ ಮಗನಾದ ಯೋನಾತಾನನಿಗೂ ಕರ್ತ ನನ್ನು ಕುರಿತು ಮಾಡಿದ ಪ್ರಮಾಣಕ್ಕೋಸ್ಕರ ಅರಸನು ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿ

21:8b.2SA.021.008 ಅಯ್ಯಾಹನ ಮಗಳಾಗಿರುವ ರಿಚ್ಪಳು ಸೌಲನಿಗೆ ಹೆತ್ತ ಅವಳ ಇಬ್ಬರ ಮಕ್ಕಳಾದ ಅರ್ಮೋನೀಯನ್ನೂ ಮೆಫೀಬೋ ಶೆತ ನನ್ನೂ ಸೌಲನ ಮಗಳಾಗಿರುವ ವಿಾಕಲಳು ಮೆಹೋಲದವನಾದ ಬರ್ಜಿಲ್ಲೈಯ ಮಗನಾಗಿರುವ ಅದ್ರೀಯೇಲನಿಗೆ ಸಾಕಿದ ಐದು ಮಂದಿ ಮಕ್ಕಳನ್ನೂ ಹಿಡುಕೊಂಡು

21:9b.2SA.021.009 ಅವರನ್ನು ಗಿಬ್ಯೋನ್ಯರ ಕೈಯಲ್ಲಿ ಒಪ್ಪಿಸಿಕೊಟ್ಟನು. ಇವರು ಅವರನ್ನು ಕರ್ತನ ಮುಂದೆ ಬೆಟ್ಟದ ಮೇಲೆ ಗಲ್ಲಿಗೆ ಹಾಕಿದರು. ಹಾಗೆಯೇ ಈ ಏಳು ಮಂದಿಯೂ ಒಂದೇ ಸಾರಿ ಬಿದ್ದರು. ಜವೆ ಗೋಧಿಯ ಸುಗ್ಗಿಯ ದಿನದ ಪ್ರಾರಂಭದಲ್ಲಿ ಅವರು ಕೊಂದುಹಾಕಲ್ಪಟ್ಟರು.

21:10b.2SA.021.010 ಆಗ ಅಯ್ಯಾಹನ ಮಗಳಾದ ರಿಚ್ಪಳು ಗೋಣಿತಟ್ಟನ್ನು ತಕ್ಕೊಂಡುಹೋಗಿ ಗುಡ್ಡದ ಮೇಲೆ ಅದನ್ನು ತನಗೋಸ್ಕರ ಹಾಸಿ ಸುಗ್ಗಿಯ ದಿವಸ ಮೊದಲುಗೊಂಡು ಆಕಾಶದಿಂದ ಅವರ ಮೇಲೆ ಮಳೆ ಸುರಿಯುವ ವರೆಗೂ ಹಗಲಲ್ಲಿ ಆಕಾಶದ ಪಕ್ಷಿಗಳೂ ರಾತ್ರಿಯಲ್ಲಿ ಅಡವಿಯ ಮೃಗಗಳೂ ಅದರ ಮೇಲೆ ಕೂತುಕೊಳ್ಳದಂತೆ ಕಾಯುತ್ತಿದ್ದಳು.

21:11b.2SA.021.011 ಅಯ್ಯಾಹನ ಮಗಳಾದ ರಿಚ್ಪಳೆಂಬ ಸೌಲನ ಉಪಪತ್ನಿ ಮಾಡಿದ್ದು ದಾವೀದನಿಗೆ ತಿಳಿಸಲ್ಪಟ್ಟಿತು.

21:12b.2SA.021.012 ಆಗ ದಾವೀದನು ಹೋಗಿ ಫಿಲಿಷ್ಟಿಯರು ಗಿಲ್ಬೋ ವದಲ್ಲಿ ಸೌಲನನ್ನು ಹೊಡೆದಾಗ ಬೆತ್ಸಾನಿನ ಬೀದಿ ಯಲ್ಲಿ ತೂಗು ಹಾಕಿದ ಗಿಲ್ಯಾದಿನ ಯಾಬೇಷ್‌ ಪಟ್ಟಣದವರು ಅಲ್ಲಿ ಹೋಗಿ ಕದ್ದು ಒಯ್ದ

21:13b.2SA.021.013 ಸೌಲನ ಎಲುಬುಗಳನ್ನೂ ಅವನ ಮಗನಾದ ಯೋನಾತಾನನ ಎಲುಬುಗಳನ್ನೂ ಅವರಿಂದ ತಕ್ಕೊಂಡು ಅಲ್ಲಿಂದ ಬಂದು ಗಲ್ಲಿಗೆ ಹಾಕಲ್ಪಟ್ಟವರ ಎಲುಬುಗಳನ್ನೂ ಕೂಡಿಸಿ ಕೊಂಡು

21:14b.2SA.021.014 ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ಬೆನ್ಯಾವಿಾನನ ದೇಶದ ಚೇಲಾದಲ್ಲಿರುವ ಅವನ ತಂದೆಯಾದ ಕೀಷನ ಸಮಾಧಿಯಲ್ಲಿ ಹೂಣಿಟ್ಟರು. ಅವರು ಅರಸನು ಆಜ್ಞಾ ಪಿಸಿದ್ದನ್ನೆಲ್ಲಾ ತೀರಿಸಿದ ತರುವಾಯ ದೇಶಕ್ಕೋಸ್ಕರ ದೇವರಿಗೆ ವಿಜ್ಞಾಪನೆ ಮಾಡಿದರು.

21:15b.2SA.021.015 ಫಿಲಿಷ್ಟಿಯರು ತಿರಿಗಿ ಇಸ್ರಾಯೇಲ್ಯರ ಮೇಲೆ ಯುದ್ಧಮಾಡಿದರು. ಆಗ ದಾವೀದನೂ ಅವನ ಸಂಗಡ ಇದ್ದ ಅವನ ಸೇವಕರೂ ಹೋಗಿ ಫಿಲಿಷ್ಟಿಯರ ಸಂಗಡ ಯುದ್ಧಮಾಡಿದರು; ಆದರೆ ದಾವೀದನು ದಣಿದು ಹೋದನು.

21:16b.2SA.021.016 ಆಗ ಮುನ್ನೂರು ಶೇಕೆಲ ತೂಕವಾದ ಹಿತ್ತಾಳೆಯ ಈಟಿಯುಳ್ಳವನಾಗಿ ಹೊಸ ಕತ್ತಿಯನ್ನು ನಡುವಿನಲ್ಲಿ ಕಟ್ಟಿಕೊಂಡಿರುವ ಮಹಾ ಶರೀರದವನ ಮಕ್ಕಳಲ್ಲಿ ಇಷ್ಬೀಬೆನೋಬ್‌ನು ದಾವೀದ ನನ್ನು ಕೊಲ್ಲಬೇಕೆಂದಿದ್ದನು.

21:17b.2SA.021.017 ಆದರೆ ಚೆರೂಯಳ ಮಗನಾದ ಅಬೀಷೈಯು ಅವನಿಗೆ ಸಹಾಯವಾಗಿ ಬಂದು ಫಿಲಿಷ್ಟಿಯನನ್ನು ಹೊಡೆದು ಕೊಂದುಹಾಕಿ ದನು. ಆಗ ದಾವೀದನ ಜನರು ಅವನಿಗೆ--ನೀನು ಇಸ್ರಾಯೇಲಿನ ಬೆಳಕನ್ನು ಆರಿಸಿಬಿಡದ ಹಾಗೆ ಇನ್ನು ಮೇಲೆ ನಮ್ಮ ಸಂಗಡ ಯುದ್ಧಕ್ಕೆ ಹೊರಡಬೇಡ ಎಂದು ಅವನಿಗೆ ಆಣೆಯಿಟ್ಟರು.

21:18b.2SA.021.018 ತರುವಾಯ ತಿರಿಗಿ ಫಿಲಿಷ್ಟಿಯರ ಸಂಗಡ ಗೋಬಿ ನಲ್ಲಿ ಯುದ್ಧ ಉಂಟಾಯಿತು. ಆಗ ಹುಷಾತನಾದ ಸಿಬ್ಬೆಕೈನು ಮಹಾಶರೀರದವನ ಮಕ್ಕಳಲ್ಲಿ ಸಫ್‌ ಎಂಬವನನ್ನು ಕೊಂದನು.

21:19b.2SA.021.019 ತಿರಿಗಿ ಫಿಲಿಷ್ಟಿಯರ ಸಂಗಡ ಗೋಬಿನಲ್ಲಿ ಯುದ್ಧ ಉಂಟಾದಾಗ ಬೇತ್ಲೆಹೇಮಿನವನಾದ ಯಾರೇಯೋರೆ ಗೀಮ್‌ ಎಂಬವನ ಮಗನಾಗಿರುವ ಎಲ್ಹಾನಾನನು ಗಿತ್ತಿಯನಾದ ಗೊಲ್ಯಾತನ ಸಹೋದರನನ್ನು ಕೊಂದನು. ಈ ಗೊಲ್ಯಾತನ ಈಟಿಯ ಕಟ್ಟಿಗೆಯು ನೆಯ್ಯುವವರ ದೋಣೀ ಮರಕ್ಕೆ ಸಮಾನವಾಗಿತ್ತು.

21:20b.2SA.021.020 ಗತ್‌ ಊರಿನಲ್ಲಿ ಯುದ್ಧ ಉಂಟಾದಾಗ ಅಲ್ಲಿ ಎತ್ತರವಾದ ಒಬ್ಬ ಮನುಷ್ಯನಿದ್ದನು; ಅವನ ಕೈಕಾಲುಗಳ ಬೆರಳುಗಳು ಆರು ಆರಾಗಿ ಲೆಖ್ಖದಲ್ಲಿ ಇಪ್ಪತ್ತು ನಾಲ್ಕು ಆಗಿದ್ದವು. ಇವನು ಸಹ ಮಹಾಶರೀರದವನಿಗೆ ಹುಟ್ಟಿ ದನು.

21:21b.2SA.021.021 ಅವನು ಇಸ್ರಾಯೇಲನ್ನು ನಿಂದಿಸಿದ್ದರಿಂದ ದಾವೀದನ ಸಹೋದರನಾಗಿರುವ ಶಿಮ್ಮನ ಮಗ ನಾದ ಯೋನಾತಾನನು ಅವನನ್ನು ಕೊಂದುಬಿಟ್ಟನು.ಈ ನಾಲ್ಕು ಮಂದಿಯು ಗತ್‌ ಊರಿನಲ್ಲಿದ್ದ ಮಹಾಶರೀರದವನಿಗೆ ಹುಟ್ಟಿದ್ದರು; ಇವರು ದಾವೀದ ನಿಂದಲೂ ಅವನ ಸೇವಕರಿಂದಲೂ ಸಂಹಾರವಾದರು.

21:22b.2SA.021.022 ಈ ನಾಲ್ಕು ಮಂದಿಯು ಗತ್‌ ಊರಿನಲ್ಲಿದ್ದ ಮಹಾಶರೀರದವನಿಗೆ ಹುಟ್ಟಿದ್ದರು; ಇವರು ದಾವೀದ ನಿಂದಲೂ ಅವನ ಸೇವಕರಿಂದಲೂ ಸಂಹಾರವಾದರು.

22

22:1b.2SA.022.001 ಕರ್ತನು ದಾವೀದನನ್ನು ಅವನ ಎಲ್ಲಾ ಶತ್ರುಗಳ ಕೈಯೊಳಗಿಂದಲೂ ಸೌಲನ ಕೈಯೊಳಗಿಂದಲೂ ಬಿಡಿಸಿದ ದಿವಸದಲ್ಲಿ ಅವನು ಕರ್ತನನ್ನು ಕುರಿತು ಈ ಹಾಡಿನ ಮಾತುಗಳನ್ನು ಹೇಳಿದನು. ಏನಂದರೆ--

22:2b.2SA.022.002 ಕರ್ತನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನನ್ನು ತಪ್ಪಿಸುವವನೂ ಆಗಿದ್ದಾನೆ.

22:3b.2SA.022.003 ನನ್ನ ಬಂಡೆಯಾದ ದೇವರಲ್ಲಿ ನಾನು ಭರವಸ ವಿಡುವೆನು; ಆತನು ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ಉನ್ನತ ಗೋಪುರವೂ ನನ್ನ ಆಶ್ರಯವೂ ನನ್ನ ರಕ್ಷಕನೂ ಆಗಿದ್ದಾನೆ. ನೀನು ಬಲಾತ್ಕಾರಿಯಿಂದ ನನ್ನನ್ನು ರಕ್ಷಿಸುತ್ತೀ.

22:4b.2SA.022.004 ಸ್ತುತಿಗೆ ಯೋಗ್ಯನಾದ ಕರ್ತ ನನ್ನು ನಾನು ಕೂಗುತ್ತೇನೆ; ಹೀಗೆ ನಾನು ನನ್ನ ಶತ್ರು ಗಳೊಳಗಿಂದ ರಕ್ಷಿಸಲ್ಪಡುತ್ತೇನೆ.

22:5b.2SA.022.005 ಮರಣದಲೆಗಳು ನನ್ನನ್ನು ಆವರಿಸಿಕೊಂಡವು; ಭಕ್ತಿಹೀನರ ಪ್ರವಾಹಗಳು ನನ್ನನ್ನು ಹೆದರಿಸಿದವು;

22:6b.2SA.022.006 ಪಾತಾಳದ ದುಃಖಗಳು ನನ್ನನ್ನು ಸುತ್ತಿಕೊಂಡವು; ಮರಣದ ಉರ್ಲುಗಳು ನನ್ನನ್ನು ಎದುರುಗೊಂಡವು;

22:7b.2SA.022.007 ನನ್ನ ಇಕ್ಕಟ್ಟಿನಲ್ಲಿ ಕರ್ತ ನನ್ನು ಕರೆದೆನು; ನನ್ನ ದೇವರನ್ನು ಕರೆದೆನು. ಆತನು ತನ್ನ ಮಂದಿರದೊಳಗಿಂದ ನನ್ನ ಶಬ್ದವನ್ನು ಕೇಳಿದನು; ನನ್ನ ಮೊರೆಯು ಆತನ ಕಿವಿಗೆ ಮುಟ್ಟಿತು.

22:8b.2SA.022.008 ಆಗ ಭೂಮಿಯು ಕದಲಿ ಕಂಪಿಸಿತು; ಆಕಾಶದ ಅಸ್ತಿವಾರಗಳು ನಡುಗಿ ಕದಲಿದವು; ಯಾಕಂದರೆ ಆತನು ಕೋಪ ಗೊಂಡನು.

22:9b.2SA.022.009 ಆತನ ಮೂಗಿನಿಂದ ಹೊಗೆ ಏರಿತು, ಆತನ ಬಾಯಿಯೊಳಗಿಂದ ಬೆಂಕಿ ಹೊರಟು ದಹಿಸಿತು; ಕೆಂಡಗಳು ಅದರಿಂದ ಉರಿದವು.

22:10b.2SA.022.010 ಆತನು ಆಕಾಶ ಗಳನ್ನು ಬೊಗ್ಗಿಸಿ ಇಳಿದನು; ಆತನ ಪಾದಗಳ ಕೆಳಗೆ ಕಾರ್ಗತ್ತಲು ಇತ್ತು;

22:11b.2SA.022.011 ಆತನು ಕೆರೂಬಿಯ ಮೇಲೆ ಕೂತು ಹಾರಿದನು, ಗಾಳಿಯ ರೆಕ್ಕೆಗಳ ಮೇಲೆ ಕಾಣಿಸಿ ಕೊಂಡನು.

22:12b.2SA.022.012 ಕತ್ತಲನ್ನೂ ಕತ್ತಲಾದ ನೀರುಗಳನ್ನೂ ಆಕಾಶದ ಕಾರ್ಮೋಡಗಳನ್ನೂ ತನ್ನ ಸುತ್ತಲೂ ಡೇರೆ ಗಳಾಗಿ ಮಾಡಿಕೊಂಡನು.

22:13b.2SA.022.013 ಆತನ ಮುಂದಿನ ಪ್ರಕಾಶದಿಂದ ಬೆಂಕಿಯ ಕೆಂಡಗಳು ಉರಿಯಲ್ಪಟ್ಟವು.

22:14b.2SA.022.014 ಕರ್ತನು ಆಕಾಶದಿಂದ ಗುಡುಗಿದನು. ಮಹೋ ನ್ನತನು ತನ್ನ ಶಬ್ದವನ್ನು ಕೊಟ್ಟನು;

22:15b.2SA.022.015 ತನ್ನ ಬಾಣ ಗಳನ್ನು ಕಳುಹಿಸಿ ಅವರನ್ನು ಚದುರಿಸಿದನು;

22:16b.2SA.022.016 ಮಿಂಚನ್ನು ಕಳುಹಿಸಿ ಅವರನ್ನು ಗಲಿಬಿಲಿ ಮಾಡಿ ದನು. ಆಗ ಕರ್ತನ ಗದರಿಕೆಯಿಂದಲೂ ಆತನ ಮೂಗಿನ ಶ್ವಾಸದ ಗಾಳಿಯಿಂದಲೂ ಸಮುದ್ರದ ನೆಲೆ ಗಳು ಕಾಣಲ್ಪಟ್ಟವು; ಭೂಲೋಕದ ಅಸ್ತಿವಾರಗಳು ಬೈಲಾದವು.

22:17b.2SA.022.017 ಮೇಲಿನಿಂದ ಕೈಚಾಚಿ ನನ್ನನ್ನು ಹಿಡಿದು, ವಿಸ್ತಾರವಾದ ನೀರುಗಳೊಳಗಿಂದ ನನ್ನನ್ನು ಎಳೆದನು.

22:18b.2SA.022.018 ನನ್ನ ಬಲವುಳ್ಳ ಶತ್ರುವಿಗೂ ನನ್ನ ಹಗೆಯವರಿಗೂ ನನ್ನನ್ನು ತಪ್ಪಿಸಿದನು;

22:19b.2SA.022.019 ಅವರು ನನಗಿಂತ ಬಲಿಷ್ಠ ರಾಗಿದ್ದರು. ನನ್ನ ಆಪತ್ತಿನ ದಿವಸದಲ್ಲಿ ನನಗೆ ಅಡ್ಡಿ ಯಾಗಿದ್ದರು; ಆದರೆ ಕರ್ತನು ನನಗೆ ಆಧಾರ ವಾಗಿದ್ದನು.

22:20b.2SA.022.020 ನನ್ನನ್ನು ವಿಶಾಲ ಸ್ಥಳಕ್ಕೆ ಹೊರಗೆ ತಂದನು; ಆತನು ನನ್ನಲ್ಲಿ ಸಂತೋಷಪಟ್ಟದ್ದರಿಂದ ನನ್ನನ್ನು ತಪ್ಪಿಸಿಬಿಟ್ಟನು.

22:21b.2SA.022.021 ಕರ್ತನು ನನ್ನ ನೀತಿಯ ಪ್ರಕಾರ ನನಗೆ ಪ್ರತಿಫಲ ಕೊಟ್ಟನು ನನ್ನ ಕೈಗಳ ಶುದ್ಧತ್ವದ ಪ್ರಕಾರ ನನಗೆ ಬದಲುಕೊಟ್ಟನು.

22:22b.2SA.022.022 ಕರ್ತನ ಮಾರ್ಗಗಳನ್ನು ಕೈಕೊಂಡೆನು; ನಾನು ನನ್ನ ದೇವರನ್ನು ತೊರೆದುಬಿಡುವ ದುಷ್ಟತ್ವಮಾಡಲಿಲ್ಲ.

22:23b.2SA.022.023 ಆತನ ನ್ಯಾಯಗಳೆಲ್ಲಾ ನನ್ನ ಮುಂದೆ ಇದ್ದವು; ಆತನ ನಿಯಮ ಗಳನ್ನು ನನ್ನಿಂದ ಹೋಗಲಿಲ್ಲ.

22:24b.2SA.022.024 ಆತನ ಮುಂದೆ ಸಂಪೂರ್ಣನಾಗಿದ್ದು ಅಕ್ರಮದಿಂದ ನನ್ನನ್ನು ತಪ್ಪಿಸಿ ಕಾಪಾಡಿಕೊಂಡೆನು.

22:25b.2SA.022.025 ಆದದರಿಂದ ಕರ್ತನು ನನ್ನ ನೀತಿಯ ಪ್ರಕಾರವಾಗಿಯೂ ಆತನ ಕಣ್ಣುಗಳ ಮುಂದಿನ ನನ್ನ ಶುದ್ಧತ್ವದ ಪ್ರಕಾರವಾಗಿಯೂ ನನಗೆ ಬದಲುಕೊಟ್ಟನು.

22:26b.2SA.022.026 ಕೃಪೆಯುಳ್ಳವನಿಗೆ ಕೃಪೆಯುಳ್ಳವ ನಾಗಿರುವಿ; ಸಂಪೂರ್ಣನಾದ ಮನುಷ್ಯನಿಗೆ ಸಂಪೂರ್ಣನಾಗಿರುವಿ.

22:27b.2SA.022.027 ಶುದ್ಧನಿಗೆ ಶುದ್ಧನಾಗಿರುವಿ, ಮೂರ್ಖನ ಸಂಗಡ ಹೋರಾಡುವಿ.

22:28b.2SA.022.028 ನೀನು ದೀನರನ್ನು ರಕ್ಷಿಸುವಿ; ಗರ್ವಿಗಳನ್ನು ತಗ್ಗಿಸುವ ಹಾಗೆ ನಿನ್ನ ಕಣ್ಣುಗಳು ಅವರ ಮೇಲೆ ಅವೆ.

22:29b.2SA.022.029 ಓ ಕರ್ತನೇ, ನನ್ನ ದೀಪವು ನೀನೇ; ಕರ್ತನು ನನ್ನ ಕತ್ತಲನ್ನು ಪ್ರಕಾಶಿಸುವಂತೆ ಮಾಡುವನು.

22:30b.2SA.022.030 ನಿನ್ನಿಂದ ಸೈನ್ಯದ ಮೇಲೆ ಬಿದ್ದೆನು; ನನ್ನ ದೇವರಿಂದ ಗೋಡೆ ನೆಗೆದನು.

22:31b.2SA.022.031 ದೇವರಾದರೋ, ಆತನ ಮಾರ್ಗವು ಸಂಪೂರ್ಣ ವಾದದ್ದು; ಕರ್ತನ ವಾಕ್ಯವು ಶೋಧಿಸಲ್ಪಟ್ಟದ್ದಾಗಿದೆ; ಆತನಲ್ಲಿ ಭರವಸವಿಡುವವರೆಲ್ಲರಿಗೆ ಗುರಾಣಿಯಾಗಿ ದ್ದಾನೆ.

22:32b.2SA.022.032 ಕರ್ತನಲ್ಲದೆ ದೇವರು ಯಾರು? ನಮ್ಮ ದೇವರಲ್ಲದೆ ಬಂಡೆಯು ಯಾರು?

22:33b.2SA.022.033 ದೇವರು ನನ್ನ ಬಲವೂ ನನ್ನ ಪರಾಕ್ರಮವೂ ಆಗಿದ್ದಾನೆ; ನನ್ನ ಮಾರ್ಗವನ್ನು ಸಂಪೂರ್ಣಮಾಡುತ್ತಾನೆ.

22:34b.2SA.022.034 ನನ್ನ ಕಾಲುಗಳನ್ನು ಜಿಂಕೆಗಳ ಹಾಗೆ ಮಾಡಿ ನನ್ನನ್ನು ಉನ್ನತ ಸ್ಥಳಗಳ ಮೇಲೆ ನಿಲ್ಲಿಸುತ್ತಾನೆ.

22:35b.2SA.022.035 ನನ್ನ ಕೈಗಳಿಗೆ ಯುದ್ಧ ಕಲಿಸುತ್ತಾನೆ. ನನ್ನ ತೋಳುಗಳು ಕಬ್ಬಿಣದ ಬಿಲ್ಲನ್ನು ಬೊಗ್ಗಿಸುತ್ತವೆ.

22:36b.2SA.022.036 ನೀನು ನಿನ್ನ ರಕ್ಷಣೆಯ ಗುರಾಣಿ ಯನ್ನು ನನಗೆ ಕೊಟ್ಟೆ; ನಿನ್ನ ಸೌಮ್ಯತೆಯು ನನ್ನನ್ನು ಹೆಚ್ಚಿಸಿತು.

22:37b.2SA.022.037 ನನ್ನ ಹೆಜ್ಜೆಗಳನ್ನು ನನ್ನ ಕೆಳಗೆ ವಿಶಾಲ ಮಾಡಿದ್ದರಿಂದ ನನ್ನ ಕಾಲುಗಳು ಜಾರಲಿಲ್ಲ.

22:38b.2SA.022.038 ನನ್ನ ಶತ್ರುಗಳನ್ನು ಹಿಂದಟ್ಟಿ ಅವರನ್ನು ನಾಶಮಾಡಿದೆನು; ಅವರನ್ನು ಸಂಹರಿಸಿಬಿಡುವ ವರೆಗೂ ನಾನು ಹಿಂತಿರು ಗಲಿಲ್ಲ.

22:39b.2SA.022.039 ಅವರನ್ನು ಸಂಹರಿಸಿಬಿಟ್ಟೆನು. ಗಾಯಮಾಡಿ ದೆನು. ಆದದರಿಂದ ಅವರು ಏಳದೆ ಹೋಗಿ, ನನ್ನ ಪಾದಗಳ ಕೆಳಗೆ ಬಿದ್ದರು.

22:40b.2SA.022.040 ನೀನು ಯುದ್ದಕ್ಕೆ ಪರಾ ಕ್ರಮದಿಂದ ನನ್ನ ನಡುವನ್ನು ಕಟ್ಟಿದಿ; ನನ್ನ ಎದು ರಾಳಿಗಳನ್ನು ನನ್ನ ಕೆಳಗೆ ಅಧೀನಮಾಡಿದಿ.

22:41b.2SA.022.041 ನನ್ನ ಶತ್ರುಗಳು ನನಗೆ ಬೆನ್ನು ಕೊಡುವಂತೆ ಮಾಡಿದಿ; ನಾನು ನನ್ನ ಹಗೆಯವರನ್ನು ಸಂಹರಿಸುವ ಹಾಗೆ ಮಾಡಿದ್ದಿ.

22:42b.2SA.022.042 ಅವರು ನೋಡುತ್ತಿದ್ದರು, ಆದರೆ ರಕ್ಷಿಸು ವವನು ಯಾರು ಇರಲಿಲ್ಲ; ಕರ್ತನನ್ನು ನೋಡಿದರು, ಆದರೆ ಆತನು ಅವರಿಗೆ ಪ್ರತ್ಯುತ್ತರ ಕೊಡಲಿಲ್ಲ.

22:43b.2SA.022.043 ಆಗ ನಾನು ಅವರನ್ನು ನೆಲದ ಧೂಳಿನ ಹಾಗೆ ಪುಡಿಪುಡಿಮಾಡಿದೆನು; ಬೀದಿಯ ಕೆಸರಿನ ಹಾಗೆ ಅವರನ್ನು ತುಳಿದು ಚದರುವಂತೆ ಮಾಡಿದೆನು.

22:44b.2SA.022.044 ನೀನು ನನ್ನ ಜನರ ವಾಗ್ವಾದಗಳಿಂದ ನನ್ನನ್ನು ತಪ್ಪಿಸಿದ್ದೀ, ಜನಾಂಗಗಳಿಗೆ ತಲೆಯಾಗಿ ನನ್ನನ್ನು ಇರಿಸಿದ್ದೀ; ನಾನು ಅರಿಯದ ಜನರು ನನ್ನನ್ನು ಸೇವಿಸುವರು.

22:45b.2SA.022.045 ದೇಶಾಂತ ದವರು ನನಗೆ ಅಧೀನರಾಗುವರು; ಕೇಳಿದ ಕೂಡಲೆ ನನಗೆ ವಿಧೇಯರಾಗುವರು.

22:46b.2SA.022.046 ದೇಶಾಂತದವರು ಬಾಡಿಹೋಗುವರು; ತಮ್ಮನ್ನು ಮುಚ್ಚಿಕೊಂಡ ಸ್ಥಳ ಗಳಿಂದ ನಡುಗುತ್ತಾ ಬರುವರು.

22:47b.2SA.022.047 ಕರ್ತನು ಜೀವಿತ ನಾಗಿದ್ದಾನೆ; ನನ್ನ ಬಂಡೆಗೆ ಸ್ತುತಿಯಾಗಲಿ; ನನ್ನ ರಕ್ಷಣೆಯ ಬಂಡೆಯಾದ ದೇವರು ಉನ್ನತನಾಗಲಿ.

22:48b.2SA.022.048 ದೇವರೇ ನನಗೋಸ್ಕರ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ; ಜನರನ್ನು ನನಗೆ ಅಧೀನಪಡಿಸುತ್ತಾನೆ.

22:49b.2SA.022.049 ಆತನು ನನ್ನ ಶತ್ರುಗಳಿಂದ ನನ್ನನ್ನು ಹೊರಗೆ ತರು ತ್ತಾನೆ. ನೀನು ನನ್ನ ಎದುರಾಳಿಗಳಿಂದ ನನ್ನನ್ನು ತಪ್ಪಿಸಿ ಗೌರವಿಸುತ್ತೀ; ಬಲಾತ್ಕಾರದ ಮನುಷ್ಯನಿಂದ ತಪ್ಪಿ ಸುತ್ತೀ.

22:50b.2SA.022.050 ಆದದರಿಂದ ಓ ಕರ್ತನೇ, ನಾನು ಜನಾಂಗ ಗಳಲ್ಲಿ ನಿನ್ನನ್ನು ಕೊಂಡಾಡುವೆನು; ನಿನ್ನ ಹೆಸರನ್ನು ಕೀರ್ತಿಸುವೆನು.ಆತನು ತನ್ನ ಅರಸನಿಗೆ ರಕ್ಷಣೆಯ ಗೋಪುರವಾಗಿದ್ದಾನೆ; ತನ್ನ ಅಭಿಷಕ್ತನಾದ ದಾವೀದ ನಿಗೂ ಅವನ ಸಂತತಿಗೂ ಕೃಪೆಯನ್ನು ಯುಗಯುಗಕ್ಕೂ ಅನುಗ್ರಹಿಸುತ್ತಾನೆ.

22:51b.2SA.022.051 ಆತನು ತನ್ನ ಅರಸನಿಗೆ ರಕ್ಷಣೆಯ ಗೋಪುರವಾಗಿದ್ದಾನೆ; ತನ್ನ ಅಭಿಷಕ್ತನಾದ ದಾವೀದ ನಿಗೂ ಅವನ ಸಂತತಿಗೂ ಕೃಪೆಯನ್ನು ಯುಗಯುಗಕ್ಕೂ ಅನುಗ್ರಹಿಸುತ್ತಾನೆ.

23

23:1b.2SA.023.001 ದಾವೀದನ ಕಡೇ ಮಾತುಗಳು ಇವೇ--ಇಷಯನ ಮಗನಾದ ದಾವೀದನು ನುಡಿ ದನು; ಉನ್ನತವಾಗಿ ಏರಿಸಲ್ಪಟ್ಟ ಪುರುಷನು, ಯಾಕೋಬನ ದೇವರ ಅಭಿಷಕ್ತನು, ಇಸ್ರಾಯೇಲಿನ ರಮ್ಯವಾದ ಕೀರ್ತನೆಗಾರನು ನುಡಿದದ್ದೇನಂದರೆ--

23:2b.2SA.023.002 ಕರ್ತನ ಆತ್ಮನು ನನ್ನಿಂದ ಮಾತನಾಡಿದನು; ಆತನ ವಾಕ್ಯವು ನನ್ನ ಬಾಯಿಯಲ್ಲಿತ್ತು.

23:3b.2SA.023.003 ಇಸ್ರಾಯೇಲಿನ ದೇವರು ಹೇಳಿದ್ದು; ಇಸ್ರಾಯೇಲಿನ ಬಂಡೆ ನನ್ನ ಸಂಗಡ ಮಾತನಾಡಿದ್ದು--ಮನುಷ್ಯರ ಮೇಲೆ ಆಳುವ ವನು ನೀತಿವಂತನಾಗಿರತಕ್ಕದ್ದು; ಅವನು ದೇವರ ಭಯ ದಲ್ಲಿ ಆಳುವನು.

23:4b.2SA.023.004 ಸೂರ್ಯನು ಮೂಡಿರುವಂಥ, ಪ್ರಕಾಶದಿಂದ ಮೋಡಗಳಿಲ್ಲದೆ ಇರುವಂಥ, ಉದಯ ಕಾಲದ ಬೆಳಕಿನ ಹಾಗೆಯೂ ಮಳೆ ಬಂದ ಮೇಲೆ ಭೂಮಿಯಿಂದಾಗುವ ಹುಲ್ಲಿನ ಹಾಗೆಯೂ ಇರು ವನು.

23:5b.2SA.023.005 ನನ್ನ ಮನೆ ದೇವರ ಸಮ್ಮುಖದಲ್ಲಿ ಹಾಗೆಯೇ ಅಲ್ಲದಿದ್ದರೂ ನನ್ನ ಸಂಗಡ ನಿತ್ಯವಾದ ಒಡಂಬಡಿಕೆ ಯನ್ನು ಮಾಡಿದ್ದಾನೆ; ಎಲ್ಲಾದರ ವಿಷಯ ಸಿದ್ಧವಾದ ದ್ದಾಗಿಯೂ ಸ್ಥಿರವಾದದ್ದಾಗಿಯೂ ಅದೆ. ಆತನು ಅದನ್ನು ಬೆಳೆಯದೆ ಇದ್ದರೂ ನನ್ನ ಎಲ್ಲಾ ರಕ್ಷಣೆಯೂ ನನ್ನ ಎಲ್ಲಾ ಅಭಿಲಾಷೆಯೂ ಅದೇ.

23:6b.2SA.023.006 ಆದರೆ ಬೆಲಿಯಾಳನ ಮಕ್ಕಳೆಲ್ಲರೂ ತಳ್ಳಲ್ಪಡುವ ಮುಳ್ಳುಗಳ ಹಾಗೆ ಇರುವರು.

23:7b.2SA.023.007 ಅವರು ಕೈಯಿಂದ ತೆಗೆಯಲ್ಪಡುವ ವರಲ್ಲ; ಅವರನ್ನು ಮುಟ್ಟುವ ಮನುಷ್ಯನು ಕಬ್ಬಿಣ ವನ್ನೂ ಈಟಿಯ ಕಟ್ಟಿಗೆಯನ್ನೂ ಧರಿಸಿಕೊಂಡಿರ ಬೇಕು. ಅದೇ ಸ್ಥಳದಲ್ಲಿ ಬೆಂಕಿಯಿಂದ ಸುಟ್ಟು ಬಿಡಲ್ಪಡುವರು.

23:8b.2SA.023.008 ದಾವೀದನಿಗೆ ಇದ್ದ ಪರಾಕ್ರಮಶಾಲಿಗಳ ಹೆಸರು ಗಳು ಇವೇ; ಸೈನ್ಯಾಧಿಪತಿಗಳಲ್ಲಿ ಮುಖ್ಯನಾಗಿ ಆಸನದ ಮೇಲೆ ಕೂತವನಾದ ತಹ್ಕೆಮೋನ್ಯನು; ಇವನೇ ಎಚ್ನಿಯನಾದ ಅದೀನೊ. ಇವನು ಎಂಟು ನೂರು ಜನರ ಮೇಲೆ ಬಿದ್ದು ಅವರನ್ನು ಒಂದೇ ಸಾರಿ ಕೊಂದು ಹಾಕಿದನು.

23:9b.2SA.023.009 ಇವನ ತರುವಾಯ ಅಹೋಹ್ಯನಾ ಗಿರುವ ದೋದೋನ ಮಗನಾಗಿರುವ ಎಲ್ಲಾಜಾರನು. ಇವನು ಇಸ್ರಾಯೇಲ್‌ ಜನರು ಓಡಿಹೋದ ತರುವಾಯ ಯುದ್ಧಕ್ಕೆ ಕೂಡಿ ಬಂದ ಫಿಲಿಷ್ಟಿಯರನ್ನು ನಿಂದಿಸಿದ ದಾವೀದನ ಸಂಗಡ ಇದ್ದ ಮೂವರು ಪರಾಕ್ರಮಶಾಲಿಗಳಲ್ಲಿ ಒಬ್ಬನಾಗಿದ್ದನು.

23:10b.2SA.023.010 ಇವನು ಎದ್ದು ತನ್ನ ಕೈ ದಣಿದು ಕತ್ತಿಗೆ ಹತ್ತಿಕೊಳ್ಳುವ ವರೆಗೂ ಫಿಲಿಷ್ಟಿಯರನ್ನು ಹೊಡೆದುಬಿಟ್ಟನು. ಆ ದಿನ ಕರ್ತನು ದೊಡ್ಡ ರಕ್ಷಣೆಯನ್ನುಂಟು ಮಾಡಿದನು. ಜನರು ಸುಲು ಕೊಳ್ಳುವದಕ್ಕೆ ಮಾತ್ರ ಅವನ ಹಿಂದೆ ಹಿಂತಿರುಗಿದರು.

23:11b.2SA.023.011 ಇವನ ತರುವಾಯ ಹರಾರ್ಯನಾಗಿರುವ ಆಗೇಯನ ಮಗನಾದ ಶಮ್ಮ. ಅಲಸಂದಿಯಿಂದ ತುಂಬಿದ ಹೊಲ ದಲ್ಲಿ ಫಿಲಿಷ್ಟಿಯರು ದಂಡಾಗಿ ಕೂಡಿ ಬಂದಾಗ ಜನರು ಫಿಲಿಷ್ಟಿಯರ ಮುಂದೆ ಓಡಿಹೋದರು.

23:12b.2SA.023.012 ಆದರೆ ಅವನು ಆ ಹೊಲದಲ್ಲಿ ನಿಂತುಕೊಂಡು ಅದನ್ನು ಕಾಪಾಡಿ ಫಿಲಿಷ್ಟಿಯರನ್ನು ಕೊಂದುಬಿಟ್ಟನು. ಹೀಗೆ ಕರ್ತನು ದೊಡ್ಡರಕ್ಷಣೆಯನ್ನುಂಟು ಮಾಡಿದನು.

23:13b.2SA.023.013 ಮೂವತ್ತು ಮಂದಿ ಮುಖ್ಯಸ್ಥರಲ್ಲಿ ಆ ಮೂರು ಮಂದಿ ಹೊರಟು ಸುಗ್ಗಿಯ ಕಾಲದಲ್ಲಿ ಅದುಲ್ಲಾಮ್‌ ಗವಿಯಲ್ಲಿರುವ ದಾವೀದನ ಬಳಿಗೆ ಬಂದರು; ಆಗ ಫಿಲಿಷ್ಟಿಯರ ದಂಡು ರೆಫಾಯಾಮ್‌ ತಗ್ಗಿನಲ್ಲಿ ಇಳಿ ದಿತ್ತು.

23:14b.2SA.023.014 ದಾವೀದನು ಗಡಿ ಸ್ಥಳದಲ್ಲಿರುವಾಗ ಫಿಲಿಷ್ಟಿಯರ ದಂಡು ಬೇತ್ಲೆಹೇಮಿನಲ್ಲಿತ್ತು.

23:15b.2SA.023.015 ಆಗ ದಾವೀದನು ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ನನಗೆ ಕುಡಿಯಲು ಕೊಡುವ ವನಾರೆಂದು ಬಹು ಆಶೆಯಿಂದ ಹೇಳಿದನು.

23:16b.2SA.023.016 ಆಗ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿ ಯರ ದಂಡನ್ನು ಭೇದಿಸಿ ಹೊರಟು ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ ದಾವೀದನಿಗೆ ತಕ್ಕೊಂಡು ಬಂದರು. ಆದರೆ ಅವನು ಅದನ್ನು ಕುಡಿಯಲ್ಲೊಲ್ಲದೆ ಕರ್ತನಿಗಾಗಿ ಹೊಯಿ ದನು.

23:17b.2SA.023.017 ಅವನು--ಕರ್ತನೇ, ಇದನ್ನು ಕುಡಿಯುವದು ನನಗೆ ದೂರವಾಗಿರಲಿ. ಇದು ತಮ್ಮ ಪ್ರಾಣದಾಶೆ ಬಿಟ್ಟು ಹೋದ ಮನುಷ್ಯರ ರಕ್ತವಲ್ಲವೇ ಎಂದು ಹೇಳಿ ಕುಡಿಯಲೊಲ್ಲದೆ ಇದ್ದನು. ಇವುಗಳನ್ನು ಆ ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು.

23:18b.2SA.023.018 ಯೋವಾಬನ ಸಹೋದರನಾದ ಚೆರೂಯಳ ಮಗನಾಗಿರುವ ಅಬೀಷೈಯು ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ತನ್ನ ಈಟಿಯನ್ನು ಎತ್ತಿ ಮುನ್ನೂರು ಜನರನ್ನು ಸಂಹರಿಸಿದ್ದರಿಂದ ಮೂವ ರೊಳಗೆ ಹೆಸರುಗೊಂಡನು.

23:19b.2SA.023.019 ಈ ಮೂರು ಮಂದಿ ಯಲ್ಲಿ ಅವನು ಬಹು ಘನವುಳ್ಳವನಾಗಿದ್ದದ್ದು ಇದ ರಿಂದಲೇ. ಆದದರಿಂದ ಅವನು ಅವರಲ್ಲಿ ಪ್ರಧಾನ ನಾದನು. ಹೇಗಿದ್ದರೂ ಆ ಮೊದಲಿನ ಮೂರು ಜನಕ್ಕೆ ಅವನು ಸಮಾನನಾಗಿರಲಿಲ್ಲ.

23:20b.2SA.023.020 ಕಬ್ಜಯೇಲಿನಲ್ಲಿದ್ದ ಪರಾಕ್ರಮಶಾಲಿಯ ಮಗನಾದ ಯೆಹೋಯಾದಾ ವನ ಮಗನಾಗಿರುವ ಬೆನಾಯನು ಅನೇಕ ಶೂರ ಕೃತ್ಯಗಳನ್ನು ಮಾಡಿದ್ದನು. ಅವನು ಸಿಂಹದಹಾಗಿರುವ ಮೋವಾಬಿನ ಇಬ್ಬರು ಮನುಷ್ಯರನ್ನು ಕೊಂದುಬಿಟ್ಟನು. ಇದಲ್ಲದೆ ಹಿಮಕಾಲದಲ್ಲಿ ಕುಣಿಯೊಳಗೆ ಇಳಿದು ಒಂದು ಸಿಂಹವನ್ನು ಕೊಂದುಬಿಟ್ಟನು.

23:21b.2SA.023.021 ಅವನು ರೂಪವುಳ್ಳ ಒಬ್ಬ ಐಗುಪ್ತದ ಮನುಷ್ಯನನ್ನು ಕೊಂದು ಬಿಟ್ಟನು. ಆ ಐಗುಪ್ತನ ಕೈಯಲ್ಲಿ ಒಂದು ಈಟಿಯು ಇತ್ತು. ಇವನು ಒಂದು ಕೋಲನ್ನು ತಕ್ಕೊಂಡು ಅವನ ಬಳಿಗೆ ಹೋಗಿ ಆ ಈಟಿಯನ್ನು ಐಗುಪ್ತನ ಕೈಯಿಂದ ಕಸಕೊಂಡು ಅವನನ್ನು ಅವನ ಈಟಿಯಿಂದಲೇ ಕೊಂದುಹಾಕಿದನು.

23:22b.2SA.023.022 ಇವುಗಳನ್ನು ಯೆಹೋಯಾ ದಾವನ ಮಗನಾದ ಬೆನಾಯನು ಮಾಡಿದ್ದರಿಂದ ಮೂರು ಮಂದಿ ಪರಾಕ್ರಮಶಾಲಿಗಳಲ್ಲಿ ಹೆಸರು ಗೊಂಡವನಾಗಿದ್ದನು.

23:23b.2SA.023.023 ಇವನು ಮೂವತ್ತು ಜನರಿ ಗಿಂತ ಹೆಚ್ಚು ಘನವುಳ್ಳವನಾಗಿದ್ದನು; ಆದರೆ ಆ ಮೊದಲಿನ ಮೂರು ಮಂದಿಗೆ ಅವನು ಸಮಾನ ನಾಗಿರಲಿಲ್ಲ; ದಾವೀದನು ಅವನನ್ನು ತನ್ನ ಮೈಗಾವಲಿ ನವರ ಮೇಲೆ ಯಜಮಾನನನ್ನಾಗಿಟ್ಟನು.

23:24b.2SA.023.024 ಯೋವಾಬನ ಸಹೋದರನಾದ ಅಸಾಹೇಲನು ಮೂವತ್ತು ಮಂದಿಯಲ್ಲಿ ಒಬ್ಬನಾಗಿದ್ದನು. ಈ ಮೂವತ್ತು ಮಂದಿ ಯಾರಂದರೆ; ಬೇತ್ಲೆಹೇಮ್‌ ಊರಿನ ದೋದೋವಿನ ಮಗನಾದ ಎಲ್ಹಾನಾನು;

23:25b.2SA.023.025 ಹರೋದಿನವನಾದ ಶಮ್ಮನು, ಎಲೀಕನು, ಪೆಲೆಟ ನಾದ ಹೆಲೆಚ್‌,

23:26b.2SA.023.026 ತೆಕೋವಿಯನಾದ ಇಕ್ಕೇಷನ ಮಗನಾದ ಈರಾ.

23:27b.2SA.023.027 ಅಣತೋತಿನವನಾದ ಅಬೀ ಯೆಜರ್‌, ಹುಷಾ ಊರಿನವನಾದ ಮೆಬುನೈ, ಅಹೋಹಿನವನಾದ ಚಲ್ಮೋನ್‌,

23:28b.2SA.023.028 ನೆಟೋಫದ ವನಾದ ಮಹರೈ,

23:29b.2SA.023.029 ನೆಟೋಫದವನಾದ ಬಾಣನ ಮಗ ಹೆಲೇಬ್‌,

23:30b.2SA.023.030 ಬೆನ್ಯಾವಿಾನನ ಮಕ್ಕಳ ಗಿಬೆ ಊರಿನವನಾದ ರೀಬೈ ಮಗನಾದ ಇತೈ,

23:31b.2SA.023.031 ಪಿತೋನ್ಯ ನಾದ ಬೆನಾಯನು, ನಹಲೇ ಗಾಷ್‌ ಊರಿನವನಾದ ಹಿದೈ ಅರಾಬಾದ ಅಬೀಅಲ್ಬೋನ್‌, ಬರ್ಹುಮ್ಯನಾದ ಅಜ್ಮಾವೇತನು, ಶಾಲ್ಬೋನ್ಯನಾದ ಎಲೆಯಖ್ಬಾ

23:32b.2SA.023.032 ಯಾಷೇನನ ಕುಮಾರರಲ್ಲಿ ಒಬ್ಬನಾದ ಯೋನಾತಾ ನನು,

23:33b.2SA.023.033 ಹರಾರ್ಯನಾದ ಶಮ್ಮನು,

23:34b.2SA.023.034 ಅರಾರ್ಯನಾದ ಶಾರಾರನ ಮಗನಾದ ಅಹೀಯಾಮ್‌, ಮಾಕಾತ್ಯರಲ್ಲಿ ಒಬ್ಬನ ಮಗನಾಗಿರುವ ಅಹಸ್ಬೈ ಮಗನಾದ ಎಲೀಫೆ ಲೆಟನು, ಗಿಲೋವಿಯನಾಗಿರುವ ಅಹೀತೋಫೆಲನ ಮಗನಾದ ಎಲೀಯಾಮನು,

23:35b.2SA.023.035 ಕರ್ಮೇಲ್ಯನಾದ ಹೆಚ್ರೊ, ಅರ್ಬಿಯನಾದ ಪಾರೈ, ಚೋಬದವನಾದ ನಾತಾನ್‌ ಮಗನಾಗಿರುವ ಇಗಾಲ್‌,

23:36b.2SA.023.036 ಗಾದ್ಯನಾದ ಬಾನಿ, ಅಮ್ಮೋನ್ಯನಾದ ಚೇಲೆಕ್‌,

23:37b.2SA.023.037 ಚೆರೂಯಳ ಮಗನಾದ ಯೋವಾಬನ ಆಯುಧಗಳನ್ನು ಹಿಡಿಯುವ ಬೇರೋತ್ಯನಾದ ನಹರೈ,

23:38b.2SA.023.038 ಇತ್ರಿಯರಾದ ಈರಾ ಗಾರೇಬನು,ಹಿತ್ತಿಯನಾದ ಊರೀಯನು ಇವ ರೆಲ್ಲಾ ಮೂವತ್ತೇಳು ಮಂದಿಯು.

23:39b.2SA.023.039 ಹಿತ್ತಿಯನಾದ ಊರೀಯನು ಇವ ರೆಲ್ಲಾ ಮೂವತ್ತೇಳು ಮಂದಿಯು.

24

24:1b.2SA.024.001 ಕರ್ತನ ಕೋಪವು ತಿರಿಗಿ ಇಸ್ರಾಯೇಲಿಗೆ ವಿರೋಧವಾಗಿ ಉರಿಯಿತು; ಆಗ ಇಸ್ರಾ ಯೇಲನ್ನೂ ಯೆಹೂದವನ್ನೂ ಲೆಕ್ಕಿಸಲು ಹೋಗೆಂದು ಆತನು ದಾವೀದನನ್ನು ಪ್ರೇರೇಪಿಸಿದನು.

24:2b.2SA.024.002 ಅರಸನು ಸೈನ್ಯಾಧಿಪತಿಯಾದ ಯೋವಾಬನಿಗೆ--ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ ನೀನು ದಾನ್‌ನಿಂದ ಬೇರ್ಷೆಬದ ವರೆಗೂ ಇರುವ ಇಸ್ರಾಯೇಲ್‌ ಎಲ್ಲಾ ಗೋತ್ರಗಳಲ್ಲಿ ಹೋಗಿ, ಜನರನ್ನು ಲೆಕ್ಕಿಸು, ಅಂದನು.

24:3b.2SA.024.003 ಆಗ ಯೋವಾಬನು ಅರಸನಿಗೆ-- ಅರಸನಾದ ನನ್ನ ಒಡೆಯನ ಕಣ್ಣುಗಳು ಅದನ್ನು ನೋಡುವ ಹಾಗೆ ನಿನ್ನ ದೇವರಾದ ಕರ್ತನು ಈಗ ಇರುವದಕ್ಕಿಂತ ಜ ರನ್ನು ನೂರರಷ್ಟಾಗಿ ಹೆಚ್ಚು ಮಾಡಲಿ; ಆದರೆ ಅರಸ ನಾದ ನನ್ನ ಒಡೆಯನು ಈ ಕಾರ್ಯವನ್ನು ಆಶಿಸುವ ದೇನು ಅಂದನು. ಆದಾಗ್ಯೂ ಅರಸನ ಮಾತು ಯೋವಾಬನಿಗೂ ಸೈನ್ಯಾಧಿಪತಿಗಳಿಗೂ ವಿರೋಧವಾಗಿ ಪ್ರೇರೇಪಿಸಿತು.

24:4b.2SA.024.004 ಆಗ ಯೋವಾಬನೂ ಸೈನ್ಯಾಧಿಪತಿಗಳೂ ಇಸ್ರಾ ಯೇಲ್‌ ಜನರನ್ನು ಲೆಕ್ಕಿಸಲು ಅರಸನ ಸಮ್ಮುಖದಿಂದ ಹೊರಟು ಹೋದರು.

24:5b.2SA.024.005 ಅವರು ಯೊರ್ದನನ್ನು ದಾಟಿ ಗಾದ್‌ ನದಿಯ ಮಧ್ಯದಲ್ಲಿರುವ ಪಟ್ಟಣಕ್ಕೆ ಬಲ ಪಾರ್ಶ್ವವಾದ ಅರೋಯೇರಿನಲ್ಲಿಯೂ ಯಗ್ಜೇರಿ ನಲ್ಲಿಯೂ ಇಳಿದು

24:6b.2SA.024.006 ಅಲ್ಲಿಂದ ಗಿಲ್ಯಾದಿಗೂ ತಖ್ತೀಮ್‌ ಹೊಜೀಯ ದೇಶಕ್ಕೂ ಅಲ್ಲಿಂದ ದಾನ್‌ನಿಗೂ ಅಲ್ಲಿಂದ ಸುತ್ತಿಕೊಂಡು ಚೀದೋನಿಗೂ ಬಂದರು.

24:7b.2SA.024.007 ಅವರು ತೂರಿನ ಭದ್ರ ಸ್ಥಳಕ್ಕೂ ಹಿವ್ವಿಯರ ಕಾನಾ ನ್ಯರ ಎಲ್ಲಾ ಪಟ್ಟಣಗಳಿಗೂ ಅಲ್ಲಿಂದ ಯೆಹೂದದ ದಕ್ಷಿಣಕ್ಕೂ ಬೇರ್ಷೆಬಕ್ಕೂ ಬಂದರು.

24:8b.2SA.024.008 ಹೀಗೆಯೇ ಅವರು ಎಲ್ಲಾ ದೇಶಕ್ಕೆ ಹೋಗಿ ಒಂಭತ್ತು ತಿಂಗಳು ಇಪ್ಪತ್ತು ದಿವಸವಾದ ತರುವಾಯ ಯೆರೂಸಲೇಮಿಗೆ ಬಂದರು.

24:9b.2SA.024.009 ಯೋವಾಬನು ಅರಸನಿಗೆ ಕೊಟ್ಟ ಜನರ ಒಟ್ಟು ಲೆಕ್ಕವೇನಂದರೆ, ಇಸ್ರಾಯೇಲ್ಯರಲ್ಲಿ ಕತ್ತಿ ಹಿಡಿಯತಕ್ಕ ಪರಾಕ್ರಮವುಳ್ಳ ಎಂಟು ಲಕ್ಷ ಮಂದಿ ಇದ್ದರು. ಯೆಹೂದದ ಜನರು ಐದು ಲಕ್ಷ ಮಂದಿಯಾಗಿದ್ದರು.

24:10b.2SA.024.010 ಆದರೆ ದಾವೀದನು ಜನರನ್ನು ಲೆಕ್ಕಿಸಿದ ತರು ವಾಯ ಅವನು ತನ್ನ ಹೃದಯದಲ್ಲಿ ತಿವಿಯಲ್ಪಟ್ಟನು. ಆದದರಿಂದ ದಾವೀದನು ಕರ್ತನಿಗೆ--ನಾನು ಮಾಡಿ ದ್ದರಲ್ಲಿ ಮಹಾ ಪಾಪಮಾಡಿದೆನು. ಕರ್ತನೇ, ದಯ ಮಾಡಿ ನಿನ್ನ ಸೇವಕನ ಅಕ್ರಮವನ್ನು ಪರಿಹರಿಸು; ನಾನು ಬಹಳ ಹುಚ್ಚುತನ ಮಾಡಿದೆನು ಅಂದನು.

24:11b.2SA.024.011 ದಾವೀದನು ಉದಯದಲ್ಲಿ ಎದ್ದಾಗ ಅವನ ದರ್ಶಿಯಾದ ಗಾದ್‌ ಪ್ರವಾದಿಗೆ ಕರ್ತನ ವಾಕ್ಯ ಉಂಟಾಗಿ ಅವನಿಗೆ--

24:12b.2SA.024.012 ನೀನು ಹೋಗಿ ದಾವೀದ ನಿಗೆ--ಮೂರು ವಿಷಯಗಳನ್ನು ನಾನು ನಿನ್ನ ಮುಂದೆ ಇಡುವೆನು. ನಾನು ನಿನಗೆ ಮಾಡುವ ಹಾಗೆ ಅವುಗ ಳಲ್ಲಿ ಒಂದನ್ನು ಆದುಕೋ ಎಂದು ಕರ್ತನು ಹೇಳು ತ್ತಾನೆ ಅಂದನು.

24:13b.2SA.024.013 ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ನಿನ್ನ ದೇಶದಲ್ಲಿ ನಿನಗೆ ಏಳು ವರುಷ ಬರವು ಆಗಬೇಕೋ ಇಲ್ಲವೆ ಮೂರು ತಿಂಗಳು ನಿನ್ನ ಶತ್ರುಗಳು ನಿನ್ನನ್ನು ಹಿಂದಟ್ಟುವಾಗ ನೀನು ಅವರ ಮುಂದೆ ಓಡಿಹೋಗಬೇಕೋ? ಇಲ್ಲವೆ ನಿನ್ನ ದೇಶದಲ್ಲಿ ಮೂರು ದಿವಸ ಬಾಧೆ ಉಂಟಾಗಬೇಕೋ? ಈಗ ನನ್ನನ್ನು ಕಳುಹಿಸಿದಾತನಿಗೆ ನಾನು ಏನು ಪ್ರತ್ಯುತ್ತರ ತಕ್ಕೊಂಡು ಹೋಗಬೇಕು ಯೋಚಿಸಿನೋಡು ಅಂದನು.

24:14b.2SA.024.014 ಆಗ ದಾವೀದನು ಗಾದನಿಗೆ--ನಾನು ಬಹು ಇಕ್ಕಟ್ಟಿನಲ್ಲಿದ್ದೇನೆ. ಈಗ ಕರ್ತನ ಕೈಯಲ್ಲಿ ಬೀಳುವೆವು; ಯಾಕಂದರೆ ಆತನ ಕರುಣೆಯು ಬಹಳವಾಗಿದೆ; ಮನುಷ್ಯರ ಕೈಯಲ್ಲಿ ಬೀಳೆನು ಅಂದನು.

24:15b.2SA.024.015 ಹಾಗೆಯೇ ಕರ್ತನು ಉದಯ ಕಾಲದಿಂದ ನೇಮಿಸಿದ ಕಾಲದ ವರೆಗೂ ಇಸ್ರಾಯೇಲಿನ ಮೇಲೆ ವ್ಯಾಧಿಯನ್ನು ಕಳುಹಿಸಿದನು. ಆದದರಿಂದ ದಾನಿ ಬನಿಂದ ಬೆರ್ಷೆಬದ ವರೆಗೂ ಇರುವ ಜನರಲ್ಲಿ ಎಪ್ಪತ್ತುಸಾವಿರ ಜನರು ಸತ್ತುಹೋದರು.

24:16b.2SA.024.016 ಆದರೆ ದೂತನು ಯೆರೂಸಲೇಮನ್ನು ಹಾಳುಮಾಡಲು ಅದರ ಮೇಲೆ ತನ್ನ ಕೈಚಾಚಿದಾಗ ಕರ್ತನು ಆ ಕೇಡಿಗೆ ಪಶ್ಚಾತ್ತಾಪಪಟ್ಟು ಜನರನ್ನು ನಾಶಮಾಡುವ ದೂತನಿಗೆಸಾಕು; ಈಗ ನಿನ್ನ ಕೈಯನ್ನು ಹಿಂದೆ ತಕ್ಕೋ ಅಂದನು.

24:17b.2SA.024.017 ಆಗ ಕರ್ತನ ದೂತನು ಯೆಬೂಸಿ ಯನಾದ ಅರೌನನು ತುಳಿಸುವ ಕಣದ ಬಳಿಯಲ್ಲಿ ಇದ್ದನು. ದಾವೀದನು ಜನಸಂಹಾರ ದೂತನನ್ನು ನೋಡಿದಾಗ ಅವನು ಕರ್ತನಿಗೆ--ಇಗೋ, ನಾನೇ ಪಾಪಮಾಡಿದೆನು; ದುಷ್ಟತ್ವದಿಂದ ಮಾಡಿದವನು ನಾನೇ; ಆದರೆ ಈ ಕುರಿಗಳಂತಿರುವ ಜನರು ಮಾಡಿ ದ್ದೇನು? ನಿನ್ನ ಕೈ ನನಗೆ ವಿರೋಧವಾಗಿಯೂ ನನ್ನ ತಂದೆಯ ಮನೆಗೆ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ ಅಂದನು.

24:18b.2SA.024.018 ಅದೇ ದಿವಸದಲ್ಲಿ ಪ್ರವಾದಿಯಾದ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಕರ್ತನಿಗೆ ಒಂದು ಬಲಿಪೀಠವನ್ನು ಕಟ್ಟಿಸು ಅಂದನು.

24:19b.2SA.024.019 ಆಗ ದಾವೀದನು ಗಾದನು ಹೇಳಿದ ಹಾಗೆಯೇ ಕರ್ತನು ಆಜ್ಞಾಪಿಸಿದ ಪ್ರಕಾರವೇ ಹೋದನು.

24:20b.2SA.024.020 ಆದರೆ ಅರೌನನು ಕಣ್ಣೆತ್ತಿ ಅರಸನೂ ಅವನ ಸೇವಕರೂ ತನ್ನ ಬಳಿಗೆ ಬರುವದನ್ನು ನೋಡಿದನು; ಆಗ ಅರೌನನು ಅವರ ಮುಂದೆ ಹೋಗಿ ಅರಸನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದನು. ಅರೌನನುಅರಸನಾದ ನನ್ನ ಒಡೆಯನು ತನ್ನ ಸೇವಕನ ಬಳಿಗೆ ಬಂದದ್ದೇನು ಅಂದನು.

24:21b.2SA.024.021 ಅದಕ್ಕೆ ದಾವೀ ದನು--ಈ ಬಾಧೆಯು ಜನರ ಕಡೆಯಿಂದ ತಡೆ ಯಲ್ಪಡುವ ಹಾಗೆ ಕರ್ತನಿಗೆ ಒಂದು ಬಲಿಪೀಠವನ್ನು ಕಟ್ಟಿಸುವದಕ್ಕೆ ಈ ಕಣವನ್ನು ನಿನ್ನಿಂದ ಕೊಂಡು ಕೊಳ್ಳಲು ಬಂದಿದ್ದೇನೆ ಅಂದನು.

24:22b.2SA.024.022 ಅರೌನನು ದಾವೀದನಿಗೆ--ಅರಸನಾದ ನನ್ನ ಒಡೆಯನು ಅದನ್ನು ತಕ್ಕೊಂಡು ತನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ಅರ್ಪಿಸಲಿ; ಇಗೋ, ದಹನಬಲಿಗೋಸ್ಕರ ಎತ್ತು ಗಳೂ ಕಟ್ಟಿಗೆಗಳಿಗೋಸ್ಕರ ಹಂತಿ ದೂಡುವ ಸಾಮಾನೂ ಬಾತಿ ಮುಟ್ಟುಗಳೂ ಇಲ್ಲಿ ಅವೆ ಅಂದನು.

24:23b.2SA.024.023 ಅರೌನನು ಇವುಗಳನ್ನೆಲ್ಲಾ ಅರಸನ ಸೇವಕನಾದ ನಾನು ಅರಸನಿಗೆ ಕೊಟ್ಟೆನು. ಇದಲ್ಲದೆ ಅರೌನನು ಅರಸನಿಗೆ--ನಿನ್ನ ದೇವರಾದ ಕರ್ತನು ನಿನ್ನನ್ನು ಅಂಗೀಕರಿಸಲಿ ಅಂದನು.

24:24b.2SA.024.024 ಆದರೆ ಅರಸನು ಅರೌನನಿಗೆ--ಹಾಗಲ್ಲ; ನಿಶ್ಚಯವಾಗಿ ನಿನ್ನಿಂದ ಕ್ರಯಕ್ಕೆ ಕೊಂಡುಕೊಳ್ಳುತ್ತೇನೆ; ಉಚಿತವಾಗಿ ಬಂದ ದಹನ ಬಲಿಗಳನ್ನು ನನ್ನ ದೇವರಾದ ಕರ್ತನಿಗೆ ಅರ್ಪಿ ಸೆನು ಅಂದನು. ಹೀಗೆ ದಾವೀದನು ಆ ಕಣವನ್ನೂ ಎತ್ತುಗಳನ್ನೂ ಐವತ್ತು ಶೇಕೆಲ್‌ ಬೆಳ್ಳಿಗೆ ಕೊಂಡು ಕೊಂಡನು.ಆಗ ದಾವೀದನು ಕರ್ತನಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿಸಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು. ಹೀಗೆ ಕರ್ತನು ದೇಶಕ್ಕೋಸ್ಕರ ಬಿನ್ನಹವನ್ನು ಕೇಳಿದ್ದರಿಂದ ಇಸ್ರಾ ಯೇಲಿನ ಕಡೆಯಿಂದ ಆ ಬಾಧೆಯು ನಿಂತಿತು.

24:25b.2SA.024.025 ಆಗ ದಾವೀದನು ಕರ್ತನಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿಸಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು. ಹೀಗೆ ಕರ್ತನು ದೇಶಕ್ಕೋಸ್ಕರ ಬಿನ್ನಹವನ್ನು ಕೇಳಿದ್ದರಿಂದ ಇಸ್ರಾ ಯೇಲಿನ ಕಡೆಯಿಂದ ಆ ಬಾಧೆಯು ನಿಂತಿತು.


Holder of rights
Multilingual Bible Corpus

Citation Suggestion for this Object
TextGrid Repository (2025). Kannada Collection. 2 Samuel (Kannada). 2 Samuel (Kannada). Multilingual Parallel Bible Corpus. Multilingual Bible Corpus. https://hdl.handle.net/21.11113/0000-0016-A18C-4