2 Kings (Kannada)
1
1:1b.2KI.001.001 ಅಹಾಬನು ಸತ್ತ ತರುವಾಯ ಮೋವಾಬ್ಯರು ಇಸ್ರಾಯೇಲ್ಯರಿಗೆ ವಿರೋಧವಾಗಿ ತಿರುಗಿ ಬಿದ್ದರು.
1:2b.2KI.001.002 ಇದಲ್ಲದೆ ಅಹಜ್ಯನು ಸಮಾರ್ಯ ದಲ್ಲಿರುವ ತನ್ನ ಮೇಲು ಮಾಳಿಗೆಯ ಜಾಲರು ಕಿಟಿಕಿ ಯಿಂದ ಬಿದ್ದು ರೋಗಿಷ್ಟನಾದದರಿಂದ ಸೇವಕರನ್ನು ಕರೆದು--ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನ ಬಳಿಗೆ ಹೋಗಿ--ನಾನು ಈ ರೋಗದಿಂದ ವಾಸಿಯಾ ಗುವೇನೋ ಇಲ್ಲವೋ ಎಂದು ವಿಚಾರಿಸಲು ಅವರನ್ನು ಕಳುಹಿಸಿದನು.
1:3b.2KI.001.003 ಆದರೆ ಕರ್ತನ ದೂತನು ತಿಷ್ಬೀಯ ನಾದ ಎಲೀಯನಿಗೆ--ನೀನೆದ್ದು ಸಮಾರ್ಯದ ಅರಸನ ಸೇವಕರಿಗೆ ಎದುರಾಗಿ ಹೋಗಿ ಅವರಿಗೆ ಹೇಳಬೇಕಾ ದದ್ದೇನಂದರೆ--ಇಸ್ರಾಯೇಲ್ಯರಲ್ಲಿ ದೇವರು ಇಲ್ಲದೆ ಇರುವದರಿಂದಲೋ ನೀವು ಎಕ್ರೋನಿನ ದೇವ ರಾದ ಬಾಳ್ಜೆಬೂಬನನ್ನು ವಿಚಾರಿಸಲು ಹೋಗುತ್ತೀರಿ?
1:4b.2KI.001.004 ಇದರ ನಿಮಿತ್ತ ನೀನು ಏರಿದ ಮಂಚದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು. ಆಗ ಎಲೀಯನು ಹೊರಟುಹೋದನು.
1:5b.2KI.001.005 ಸೇವಕರು ಅವನ ಬಳಿಗೆ ತಿರುಗಿ ಬಂದಾಗ ಅವನು ಅವರಿಗೆ--ನೀವು ಈಗ ತಿರುಗಿ ಬಂದದ್ದೇನು ಅಂದನು.
1:6b.2KI.001.006 ಅವರು ಅವನಿಗೆ ಹೇಳಿದ್ದೇನಂದರೆ--ಒಬ್ಬ ಮನು ಷ್ಯನು ಎದುರಾಗಿ ಬಂದು ನಮಗೆ--ನೀವು ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ತಿರುಗಿ ಹೋಗಿ-- ಇಸ್ರಾ ಯೇಲ್ಯರಲ್ಲಿ ದೇವರು ಇಲ್ಲದೆ ಇರುವದರಿಂದಲೋ ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವದಕ್ಕೆ ಕಳುಹಿಸುವದೇನು? ಇದರ ನಿಮಿತ್ತ ನೀನು ಏರಿದ ಮಂಚದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆಂಬದಾಗಿ ಅವನಿಗೆ ಹೇಳಿರಿ ಅಂದನು.
1:7b.2KI.001.007 ಅವನು ಅವರಿಗೆನಿಮಗೆದುರಾಗಿ ಬಂದು ಈ ಮಾತುಗಳನ್ನು ನಿಮಗೆ ಹೇಳಿದ ಮನುಷ್ಯನು ಯಾವ ತರದವನಾಗಿದ್ದಾನೆಂದು ಕೇಳಿದನು.
1:8b.2KI.001.008 ಅದಕ್ಕವರು--ಅವನು ಕೂದಲುಳ್ಳ ಮನು ಷ್ಯನು; ಅವನ ನಡುವಿನ ಸುತ್ತಲು ತೊಗಲಿನ ನಡುಕಟ್ಟು ಇತ್ತು ಅಂದರು. ಅದಕ್ಕೆ ಅವನು--ತಿಷ್ಬೀಯನಾದ ಎಲೀಯನು ಎಂದು ಹೇಳಿದನು.
1:9b.2KI.001.009 ಆಗ ಅರಸನು ಐವತ್ತು ಮಂದಿಗೆ ಪ್ರಧಾನನನ್ನು ಅವನ ಐವತ್ತು ಮಂದಿಯ ಸಂಗಡ ಇವನ ಬಳಿಗೆ ಕಳುಹಿಸಿದನು. ಅವನು ಇವನ ಬಳಿಗೆ ಹೋದಾಗ ಇಗೋ, ಇವನು ಬೆಟ್ಟದ ತುದಿಯ ಮೇಲೆ ಕುಳಿತಿದ್ದನು. ಆಗ ಅವನು ಎಲೀಯನಿಗೆ--ದೇವರ ಮನುಷ್ಯನೇ, ಇಳಿದು ಬಾ ಎಂದು ಅರಸನು ಹೇಳುತ್ತಾನೆ ಅಂದನು.
1:10b.2KI.001.010 ಅದಕ್ಕೆ ಎಲೀಯನು ಐವತ್ತು ಮಂದಿಯ ಪ್ರಧಾನನಿಗೆ ಪ್ರತ್ಯುತ್ತರವಾಗಿ--ನಾನು ದೇವರ ಮನುಷ್ಯನಾಗಿದ್ದರೆ ಬೆಂಕಿಯು ಆಕಾಶದಿಂದ ಇಳಿದು ನಿನ್ನನ್ನೂ ನಿನ್ನ ಐವತ್ತು ಮಂದಿಯನ್ನೂ ದಹಿಸಿಬಿಡಲಿ ಅಂದನು. ತಕ್ಷಣವೇ ಬೆಂಕಿಯು ಆಕಾಶದಿಂದ ಇಳಿದು ಅವನನ್ನೂ ಅವನ ಐವತ್ತು ಮಂದಿಯನ್ನೂ ದಹಿಸಿಬಿಟ್ಟಿತು.
1:11b.2KI.001.011 ತಿರುಗಿ ಅರಸನು ಇವನ ಬಳಿಗೆ ಐವತ್ತು ಮಂದಿಯ ಪ್ರಧಾನ ನನ್ನೂ ಅವನ ಐವತ್ತು ಮಂದಿಯನ್ನೂ ಕಳುಹಿಸಿದನು. ಅವನು ಬಂದು ಇವನಿಗೆ--ದೇವರ ಮನುಷ್ಯನೇ, ಬೇಗ ಇಳಿದು ಬಾ ಎಂದು ಅರಸನು ಹೇಳುತ್ತಾನೆ ಅಂದನು.
1:12b.2KI.001.012 ಎಲೀಯನು ಅವರಿಗೆ ಪ್ರತ್ಯುತ್ತರವಾಗಿನಾನು ದೇವರ ಮನುಷ್ಯನಾಗಿದ್ದರೆ ಬೆಂಕಿಯು ಆಕಾಶ ದಿಂದ ಇಳಿದು ನಿನ್ನನ್ನೂ ನಿನ್ನ ಐವತ್ತು ಮಂದಿಯನ್ನೂ ದಹಿಸಿಬಿಡಲಿ ಅಂದನು. ತಕ್ಷಣವೇ ದೇವರ ಬೆಂಕಿಯು ಆಕಾಶದಿಂದ ಇಳಿದು ಅವನನ್ನೂ ಅವನ ಐವತ್ತು ಮಂದಿಯನ್ನೂ ಸುಟ್ಟುಬಿಟ್ಟಿತು.
1:13b.2KI.001.013 ತಿರುಗಿ ಅವನು ಐವತ್ತು ಮಂದಿಯ ಪ್ರಧಾನನಾದ ಮೂರನೆಯವ ನನ್ನೂ ಅವನ ಐವತ್ತು ಮಂದಿಯನ್ನೂ ಕಳುಹಿಸಿದನು. ಈ ಐವತ್ತು ಮಂದಿಗೆ ಪ್ರಧಾನನಾದ ಮೂರನೆಯ ವನು ಬಂದು ಎಲೀಯನ ಮುಂದೆ ತನ್ನ ಮೊಣ ಕಾಲೂರಿಕೊಂಡು ಇವನಿಗೆ--ದೇವರ ಮನುಷ್ಯನೇ, ನೀನು ದಯೆತೋರು, ನನ್ನ ಪ್ರಾಣವೂ ನಿನ್ನ ಸೇವಕ ರಾದ ಈ ಐವತ್ತು ಮಂದಿಯ ಪ್ರಾಣಗಳೂ ನಿನ್ನ ಸಮ್ಮುಖದಲ್ಲಿ ಅಮೂಲ್ಯವಾಗಿರಲಿ.
1:14b.2KI.001.014 ಇಗೋ, ಬೆಂಕಿಯು ಆಕಾಶದಿಂದ ಇಳಿದು ಮೊದಲಿನ ಇಬ್ಬರು ಪ್ರಧಾನರನ್ನೂ ಅವರ ಐವತ್ತು ಮಂದಿಯನ್ನೂ ದಹಿ ಸಿಬಿಟ್ಟಿತು. ಆದರೆ ಈಗ ನನ್ನ ಪ್ರಾಣವು ನಿನ್ನ ಸಮ್ಮುಖದಲ್ಲಿ ಅಮೂಲ್ಯವಾಗಿರಲಿ ಎಂದು ಹೇಳಿ ಅವ ನನ್ನು ಬೇಡಿಕೊಂಡನು.
1:15b.2KI.001.015 ಆಗ ಕರ್ತನ ದೂತನು ಎಲೀಯನಿಗೆ--ಅವನ ಸಂಗಡ ಇಳಿದು ಹೋಗು; ಅವನಿಗೆ ಭಯಪಡಬೇಡ ಅಂದನು.
1:16b.2KI.001.016 ಹಾಗೆಯೇ ಅವನು ಎದ್ದು ಅವನ ಸಂಗಡ ಅರಸನ ಬಳಿಗೆ ಇಳಿದು ಹೋಗಿ ಅವನಿಗೆ--ಆತನ ವಾಕ್ಯವನ್ನು ವಿಚಾರಿಸಲು ಇಸ್ರಾಯೇಲಿನಲ್ಲಿ ದೇವರು ಇಲ್ಲವೆಂದು ನೀನು ಎಕ್ರೋ ನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸಲು ಜನ ರನ್ನು ಕಳುಹಿಸಿದ ಕಾರಣ ನೀನು ಏರಿದ ಮಂಚ ದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು.
1:17b.2KI.001.017 ಹಾಗೆಯೇ ಎಲೀ ಯನು ಹೇಳಿದ ಕರ್ತನ ವಾಕ್ಯದ ಪ್ರಕಾರವೇ ಅವನು ಸತ್ತು ಹೋದನು; ಅವನಿಗೆ ಮಗನು ಇಲ್ಲದ್ದರಿಂದ ಯೆಹೂದದ ಅರಸನಾದ ಯೆಹೋಷಾಫಾಟನ ಮಗ ನಾಗಿರುವ ಯೋರಾಮನ ಆಳ್ವಿಕೆಯ ಎರಡನೇ ವರುಷ ದಲ್ಲಿ ಯೋರಾಮನು ಅವನಿಗೆ ಬದಲಾಗಿ ಅರಸ ನಾದನು.ಅಹಜ್ಯನು ಮಾಡಿದ ಇತರ ಕ್ರಿಯೆಗಳು ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
1:18b.2KI.001.018 ಅಹಜ್ಯನು ಮಾಡಿದ ಇತರ ಕ್ರಿಯೆಗಳು ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
2
2:1b.2KI.002.001 ಕರ್ತನು ಎಲೀಯನನ್ನು ಬಿರುಗಾಳಿಯಿಂದ ಆಕಾಶಕ್ಕೆ ಎತ್ತಿಕೊಳ್ಳುವಾಗ ಎಲೀಯನು ಎಲೀಷನ ಸಂಗಡ ಗಿಲ್ಗಾಲಿನಿಂದ ಹೋಗುತ್ತಾ ಇದ್ದನು.
2:2b.2KI.002.002 ಆಗ ಎಲೀಯನು ಎಲೀಷನಿಗೆ--ನೀನು ದಯಮಾಡಿ ಇಲ್ಲಿ ಇರು; ಕರ್ತನು ನನ್ನನ್ನು ಬೇತೇಲಿಗೆ ಕಳುಹಿಸು ತ್ತಾನೆ ಅಂದನು. ಅದಕ್ಕೆ ಎಲೀಷನು--ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದನು. ಹಾಗೆಯೇ ಅವರು ಬೇತೇಲಿಗೆ ಹೋದರು.
2:3b.2KI.002.003 ಆಗ ಬೇತೇಲಿನಲ್ಲಿರುವ ಪ್ರವಾದಿಗಳ ಮಕ್ಕಳು ಎಲೀಷನ ಬಳಿಗೆ ಬಂದು ಅವನಿಗೆ--ಇಂದು ಕರ್ತನು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತಕ್ಕೊಳ್ಳುವನೆಂದು ತಿಳಿದಿದ್ದೀಯೋ ಅಂದರು.
2:4b.2KI.002.004 ಅದಕ್ಕ ವನು--ಹೌದು, ನಾನು ಕೂಡ ಬಲ್ಲೆ; ಸುಮ್ಮನೆ ಇರ್ರಿ ಅಂದನು. ಎಲೀಯನು ಅವನಿಗೆ--ಎಲೀಷನೇ, ನೀನು ದಯಮಾಡಿ ಇಲ್ಲೇ ಇರು; ಕರ್ತನು ನನ್ನನ್ನು ಯೆರಿಕೋ ವಿಗೆ ಕಳುಹಿಸುತ್ತಾನೆ ಅಂದನು. ಅದಕ್ಕವನು--ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದನು. ಹಾಗೆಯೇ ಅವರು ಯೆರಿಕೋವಿಗೆ ಬಂದರು.
2:5b.2KI.002.005 ಆಗ ಯೆರಿಕೋವಿನಲ್ಲಿ ರುವ ಪ್ರವಾದಿಗಳ ಮಕ್ಕಳು ಎಲೀಷನ ಬಳಿಗೆ ಬಂದು ಅವನಿಗೆ--ಕರ್ತನು ಇಂದು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತಕ್ಕೊಳ್ಳುವನೆಂದು ತಿಳಿದಿದ್ದೀಯೋ ಅಂದರು. ಅದಕ್ಕವನು--ನಾನು ಕೂಡ ಬಲ್ಲೆ, ಸುಮ್ಮನೆ ಇರ್ರಿ ಅಂದನು.
2:6b.2KI.002.006 ಎಲೀಯನು ಅವನಿಗೆ--ನೀನು ದಯಮಾಡಿ ಇಲ್ಲೇ ಇರು; ಕರ್ತನು ನನ್ನನ್ನು ಯೊರ್ದ ನಿಗೆ ಕಳುಹಿಸುತ್ತಾನೆ ಅಂದನು. ಅದಕ್ಕವನು--ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದನು. ಹಾಗೆಯೇ ಅವರಿ ಬ್ಬರೂ ಮುಂದಕ್ಕೆ ನಡೆದರು.
2:7b.2KI.002.007 ಪ್ರವಾದಿಗಳ ಮಕ್ಕಳಲ್ಲಿ ಐವತ್ತು ಮಂದಿ ಹೋಗಿ ದೂರದಲ್ಲಿ ಎದುರಾಗಿ ನಿಂತರು. ಆದರೆ ಆ ಇಬ್ಬರು ಯೊರ್ದನಿನ ಬಳಿಯಲ್ಲಿ ನಿಂತರು.
2:8b.2KI.002.008 ಎಲೀಯನು ತನ್ನ ಹೊದಿಕೆಯನ್ನು ತೆಗೆದು ಮಡಚಿಕೊಂಡು ನೀರನ್ನು ಹೊಡೆದನು. ಆಗ ಆ ನೀರು ವಿಭಾಗವಾದದರಿಂದ ಅವರಿಬ್ಬರೂ ಒಣ ಭೂಮಿಯ ಮೇಲೆ ದಾಟಿಹೋದರು.
2:9b.2KI.002.009 ಅವರು ದಾಟಿಹೋದ ತರುವಾಯ ಆದದ್ದೇ ನಂದರೆ, ಎಲೀಯನು ಎಲೀಷನಿಗೆ--ನಾನು ನಿನ್ನ ಬಳಿ ಯಿಂದ ತಕ್ಕೊಳ್ಳಲ್ಪಡುವದಕ್ಕಿಂತ ಮುಂಚೆ ನಿನಗೋಸ್ಕರ ನಾನು ಮಾಡಬೇಕಾದದ್ದನ್ನು ಕೇಳು ಅಂದನು. ಅದಕ್ಕೆ ಎಲೀಷನು ದಯಮಾಡಿ ನಿನಗಿರುವ ಆತ್ಮದಲ್ಲಿ ನನಗೆ ಎರಡು ಪಾಲನ್ನು ಅನುಗ್ರಹಿಸು ಅಂದನು.
2:10b.2KI.002.010 ಅದಕ್ಕ ವನು--ನೀನು ಕಠಿಣವಾದದ್ದನ್ನು ಕೇಳಿದಿ; ಆದಾಗ್ಯೂ ನಾನು ನಿನ್ನ ಬಳಿಯಿಂದ ತೆಗೆಯಲ್ಪಡುವಾಗ ನೀನು ನನ್ನನ್ನು ನೋಡುವದಾದರೆ ನಿನಗೆ ದೊರಕುವದು; ಇಲ್ಲದಿದ್ದರೆ ದೊರಕುವುದಿಲ್ಲ ಅಂದನು.
2:11b.2KI.002.011 ಅವರು ನಡೆದು ಬಂದು ಮಾತನಾಡಿಕೊಂಡಿರುವಾಗ ಆದದ್ದೇನಂದರೆ, ಇಗೋ, ಬೆಂಕಿಯ ರಥವೂ ಬೆಂಕಿಯ ಕುದುರೆ ಗಳೂ ಅವರಿಬ್ಬರನ್ನು ವಿಂಗಡಿಸಿದವು; ಎಲೀಯನು ಬಿರುಗಾಳಿಯಲ್ಲಿ ಆಕಾಶಕ್ಕೆ ಏರಿಹೋದನು.
2:12b.2KI.002.012 ಎಲೀ ಷನು ಅದನ್ನು ನೋಡಿ--ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲಿನ ರಥವೇ, ಅದರ ಕುದುರೆ ರಾಹುತರಾಗಿದ್ದವನೇ ಎಂದು ಕೂಗಿದನು. ಮತ್ತೆ ಅವ ನನ್ನು ಕಾಣಲಿಲ್ಲ. ಆಗ ಅವನು ತನ್ನ ವಸ್ತ್ರಗಳನ್ನು ತೆಗೆದು ಎರಡು ತುಂಡಾಗಿ ಹರಿದನು.
2:13b.2KI.002.013 ಅವನು ಎಲೀಯನಿಂದ ಬಿದ್ದ ಹೊದಿಕೆಯನ್ನು ಎತ್ತಿಕೊಂಡು ಹಿಂದಕ್ಕೆಹೋಗಿ ಯೊರ್ದನಿನ ತೀರದಲ್ಲಿ ನಿಂತನು.
2:14b.2KI.002.014 ಎಲೀಯನಿಂದ ಬಿದ್ದ ಹೊದಿಕೆಯನ್ನು ತಕ್ಕೊಂಡು ನೀರನ್ನು ಹೊಡೆದು--ಎಲೀಯನ ದೇವರಾದ ಕರ್ತನು ಎಲ್ಲಿದ್ದಾನೆ ಅಂದನು. ಅವನು ಹಾಗೆ ನೀರನ್ನು ಹೊಡೆದ ತರುವಾಯ ಅದು ಎರಡು ಭಾಗವಾದದ್ದರಿಂದ ಎಲೀ ಷನು ದಾಟಿಹೋದನು.
2:15b.2KI.002.015 ಯೆರಿಕೋವಿನ ಬಳಿಯಲ್ಲಿ ಎದುರಾಗಿದ್ದ ಪ್ರವಾದಿಗಳ ಮಕ್ಕಳು ಅವನನ್ನು ಕಂಡಾಗ--ಎಲೀಯನ ಆತ್ಮನು ಎಲೀಷನ ಮೇಲೆ ನಿಂತಿರುವನು ಎಂದು ಹೇಳಿ ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗನಮಸ್ಕಾರಮಾಡಿದರು.
2:16b.2KI.002.016 ಇದ ಲ್ಲದೆ ಅವರು ಅವನಿಗೆ--ಇಗೋ, ನಿನ್ನ ಸೇವಕರ ಸಂಗಡ ಐವತ್ತು ಮಂದಿ ಬಲಿಷ್ಠರಾದವರಿದ್ದಾರೆ; ಅವರು ಹೋಗಿ ನಿನ್ನ ಯಜಮಾನನನ್ನು ಹುಡುಕಲು ಅಪ್ಪಣೆ ಯಾಗಲಿ, ಒಂದು ವೇಳೆ ಕರ್ತನ ಆತ್ಮನು ಅವನನ್ನು ಎತ್ತಿಕೊಂಡು ಹೋಗಿ ಬೆಟ್ಟದ ಮೇಲಾದರೂ ತಗ್ಗಿನ ಲ್ಲಾದರೂ ಹಾಕಿರಬಹುದು ಅಂದರು.
2:17b.2KI.002.017 ಅವನುಕಳುಹಿಸಬೇಡಿರಿ ಅಂದನು. ಆದರೆ ಅವನು ನಾಚಿಕೆ ಪಡುವ ವರೆಗೂ ಅವನನ್ನು ಬಲವಂತಮಾಡಿದ್ದರಿಂದ ಅವನು--ಕಳುಹಿಸಿರಿ ಅಂದನು. ಅವರು ಐವತ್ತು ಮಂದಿಯನ್ನು ಕಳುಹಿಸಿದರು. ಇವರು ಮೂರು ದಿವಸ ಹುಡುಕಿದರೂ ಅವನನ್ನು ಕಾಣದೆ ಹೋದರು.
2:18b.2KI.002.018 ಅವನು ಇನ್ನೂ ಯೆರಿಕೋವಿನಲ್ಲಿದ್ದಾಗ ಅವರು ತಿರುಗಿ ಅವನ ಬಳಿಗೆ ಬಂದರು. ಆಗ ಅವನು ಇವ ರಿಗೆ--ಹೋಗಬೇಡಿರೆಂದು ನಾನು ನಿಮಗೆ ಹೇಳ ಲಿಲ್ಲವೋ ಅಂದನು.
2:19b.2KI.002.019 ಆಗ ಆ ಪಟ್ಟಣದ ಜನರು ಎಲೀಷನಿಗೆ-- ಇಗೋ, ಈ ಪಟ್ಟಣದ ಸ್ಥಳವು ಒಳ್ಳೇದಾಗಿದೆ ಎಂದು ನಮ್ಮ ಒಡೆಯನು ನೋಡುತ್ತಾನೆ; ಆದರೆ ನೀರು ಕೆಟ್ಟದ್ದು, ಭೂಮಿ ಬಂಜೆಯಾದದ್ದು ಅಂದರು.
2:20b.2KI.002.020 ಅದಕ್ಕ ವನು--ನನ್ನ ಬಳಿಗೆ ಹೊಸ ಗಡಿಗೆಯನ್ನು ತಕ್ಕೊಂಡು ಬಂದು ಅದರಲ್ಲಿ ಉಪ್ಪು ಹಾಕಿರಿ ಅಂದನು. ಅವರು ಅದನ್ನು ಅವನ ಬಳಿಗೆ ತಕ್ಕೊಂಡು ಬಂದರು.
2:21b.2KI.002.021 ಅವನು ನೀರು ಬುಗ್ಗೆಯ ಬಳಿಗೆ ಹೊರಟುಹೋಗಿ ಅದರಲ್ಲಿ ಉಪ್ಪು ಹಾಕಿ ಹೇಳಿದ್ದೇನಂದರೆ--ಈ ನೀರನ್ನು ಶುದ್ಧ ಮಾಡಿದೆನು; ಇನ್ನು ಮೇಲೆ ಅದರಿಂದ ಮರಣವೂ ಬಂಜೆತನವೂ ಆಗದಿರಲೆಂದು ಕರ್ತನು ಹೇಳುತ್ತಾನೆ ಅಂದನು.
2:22b.2KI.002.022 ಎಲೀಷನು ಹೇಳಿದ ವಾಕ್ಯದ ಪ್ರಕಾರವೇ ಆ ನೀರು ಇಂದಿನ ವರೆಗೂ ಹಾಗೆಯೇ ಇರುತ್ತದೆ.
2:23b.2KI.002.023 ಅವನು ಆ ಸ್ಥಳವನ್ನು ಬಿಟ್ಟು ಬೇತೇಲಿಗೆ ಹೋದನು. ಅವನು ಮಾರ್ಗದಲ್ಲಿ ಏರಿ ಹೋಗುತ್ತಿ ರುವಾಗ ಚಿಕ್ಕ ಹುಡುಗರು ಪಟ್ಟಣದಿಂದ ಹೊರಟು ಬಂದು ಅವನನ್ನು ಹಾಸ್ಯಮಾಡಿ ಅವನಿಗೆ--ಬೋಳ ತಲೆಯವನೇ, ಏರಿ ಹೋಗು; ಬೋಳ ತಲೆಯವನೇ, ಏರಿ ಹೋಗು ಅಂದರು.
2:24b.2KI.002.024 ಅವನು ಹಿಂದಿರುಗಿ ಅವರನ್ನು ನೋಡಿ--ಕರ್ತನ ಹೆಸರಿನಲ್ಲಿ ಅವರನ್ನು ಶಪಿಸಿದನು. ಆಗ ಅಡವಿಯೊಳಗಿಂದ ಎರಡು ಹೆಣ್ಣು ಕರಡಿಗಳು ಹೊರಟು ಅವರಲ್ಲಿ ನಾಲ್ವತ್ತೆರಡು ಹುಡುಗ ರನ್ನು ಸೀಳಿಬಿಟ್ಟವು.ಅವನು ಆ ಸ್ಥಳವನ್ನು ಬಿಟ್ಟು ಕರ್ಮೆಲು ಬೆಟ್ಟಕ್ಕೆ ಹೋದನು; ಅಲ್ಲಿಂದ ಸಮಾರ್ಯಕ್ಕೆ ಹಿಂತಿರುಗಿದನು.
2:25b.2KI.002.025 ಅವನು ಆ ಸ್ಥಳವನ್ನು ಬಿಟ್ಟು ಕರ್ಮೆಲು ಬೆಟ್ಟಕ್ಕೆ ಹೋದನು; ಅಲ್ಲಿಂದ ಸಮಾರ್ಯಕ್ಕೆ ಹಿಂತಿರುಗಿದನು.
3
3:1b.2KI.003.001 ಯೆಹೂದದ ಅರಸನಾದ ಯೆಹೋಷಾಫಾಟನ ಹದಿನೆಂಟನೆಯ ವರುಷದಲ್ಲಿ ಅಹಾಬನ ಮಗನಾದ ಯೋರಾಮನು ಸಮಾರ್ಯ ದಲ್ಲಿ ಇಸ್ರಾಯೇಲ್ಯರ ಅರಸನಾಗಿ ಹನ್ನೆರಡು ವರುಷ ಆಳಿದನು.
3:2b.2KI.003.002 ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆದರೆ ತನ್ನ ತಂದೆ ತಾಯಿಯ ಹಾಗೂ ಅಲ್ಲ; ತನ್ನ ತಂದೆಯು ಮಾಡಿಟ್ಟ ಬಾಳನ ಸ್ತಂಭವನ್ನು ತೆಗೆದುಹಾಕಿದನು.
3:3b.2KI.003.003 ಆದರೂ ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಿಗೆ ಅವನು ಅಂಟಿಕೊಂಡು ಅವುಗಳನ್ನು ಬಿಡದೇ ಇದ್ದನು.
3:4b.2KI.003.004 ಮೋವಾಬಿನ ಅರಸನಾದ ಮೇಷನು ಕುರಿಮಂದೆ ಯುಳ್ಳವನಾಗಿದ್ದು ಇಸ್ರಾಯೇಲಿನ ಅರಸನಿಗೆ ಒಂದು ಲಕ್ಷ ಕುರಿಮರಿಗಳನ್ನೂ ಉಣ್ಣೆ ಸಹಿತವಾಗಿ ಒಂದು ಲಕ್ಷ ಟಗರುಗಳನ್ನೂ ಕಪ್ಪವಾಗಿ ಕೊಡುತ್ತಿದ್ದನು.
3:5b.2KI.003.005 ಅಹಾ ಬನು ಸತ್ತ ತರುವಾಯ ಏನಾಯಿತಂದರೆ, ಮೋವಾ ಬಿನ ಅರಸನು ಇಸ್ರಾಯೇಲಿನ ಅರಸನಿಗೆ ವಿರೋಧ ವಾಗಿ ತಿರುಗಿಬಿದ್ದನು.
3:6b.2KI.003.006 ಆ ದಿನದಲ್ಲಿ ಯೋರಾಮನು ಸಮಾರ್ಯದಿಂದ ಹೊರಟು ಹೋಗಿ ಇಸ್ರಾಯೇಲ್ಯರನ್ನು ಲೆಕ್ಕಿಸಿದನು.
3:7b.2KI.003.007 ಇದಲ್ಲದೆ ಅವನು ಹೋಗಿಮೋವಾಬಿನ ಅರಸನು ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾನೆ; ನೀನು ನನ್ನ ಸಂಗಡ ಮೋವಾಬಿನ ಮೇಲೆ ಯುದ್ಧಮಾಡಲು ಬರುವಿಯೋ ಎಂದು ಯೆಹೂದದ ಅರಸನಾದ ಯೆಹೋಷಾಫಾಟನಿಗೆ ಹೇಳಿ ಕಳುಹಿಸಿ ದನು. ಅದಕ್ಕವನು--ನಾನು ಬರುವೆನು; ನಾನು ನಿನ್ನ ವನೇ, ನನ್ನ ಜನರು ನಿನ್ನ ಜನರೇ, ಹಾಗೆಯೇ ನನ್ನ ಕುದುರೆಗಳು ನಿನ್ನ ಕುದುರೆಗಳಂತೆಯೇ ಅಂದನು.
3:8b.2KI.003.008 ಅದಕ್ಕೆ ಯಾವ ಮಾರ್ಗವಾಗಿ ಹೋಗೋಣ ಎಂದು ಇವನು ಕೇಳಿದಾಗ ಅವನು--ಎದೋಮಿನ ಅರಣ್ಯ ಮಾರ್ಗವಾಗಿ ಅಂದನು.
3:9b.2KI.003.009 ಹೀಗೆಯೇ ಇಸ್ರಾಯೇಲಿನ ಅರಸನೂ ಯೆಹೂದದ ಅರಸನೂ ಎದೋಮಿನ ಅರಸನೂ ಹೊರಟು ಸುತ್ತಾದ ಮಾರ್ಗದಲ್ಲಿ ಏಳು ದಿವಸ ನಡೆದರು. ಆದರೆ ಸೈನ್ಯಕ್ಕೂ ಅವರ ಹಿಂದೆ ಬಂದ ಪಶುಗಳಿಗೂ ನೀರು ಇಲ್ಲದೆ ಹೋಯಿತು.
3:10b.2KI.003.010 ಆಗ ಇಸ್ರಾಯೇಲಿನ ಅರಸನು -- ಅಯ್ಯೋ, ಕರ್ತನು ಈ ಮೂರು ಮಂದಿ ಅರಸುಗಳನ್ನು ಮೋವಾ ಬ್ಯರ ಕೈಯಲ್ಲಿ ಒಪ್ಪಿಸಿಕೊಡಲು ಕರೆದಿದ್ದಾನಲ್ಲಾ ಅಂದನು.
3:11b.2KI.003.011 ಆದರೆ ಯೆಹೋಷಾಫಾಟನು -- ಪ್ರವಾದಿಯ ಮೂಲಕವಾಗಿ ಕರ್ತನನ್ನು ಕೇಳುವ ಹಾಗೆ ಇಲ್ಲಿ ಕರ್ತನ ಪ್ರವಾದಿಯು ಯಾವನೂ ಇಲ್ಲವೋ ಅಂದನು. ಆಗ ಇಸ್ರಾಯೇಲ್ಯರ ಅರಸನ ಸೇವಕರಲ್ಲಿ ಒಬ್ಬನು ಪ್ರತ್ಯು ತ್ತರವಾಗಿ--ಎಲೀಯನ ಕೈಗಳ ಮೇಲೆ ನೀರು ಹೊಯಿದ ಶಾಫಾಟನ ಮಗನಾದ ಎಲೀಷನು ಇಲ್ಲಿದ್ದಾನೆಂದು ಹೇಳಿದನು. ಆಗ ಯೆಹೋಷಾಫಾಟನು--ಅವನ ಬಳಿ ಯಲ್ಲಿ ಕರ್ತನ ವಾಕ್ಯ ಉಂಟು ಅಂದನು.
3:12b.2KI.003.012 ಇಸ್ರಾಯೇ ಲಿನ ಅರಸನೂ ಯೆಹೋಷಾಫಾಟನೂ ಎದೋಮಿನ ಅರಸನೂ ಅವನ ಬಳಿಗೆ ಇಳಿದು ಹೋದರು.
3:13b.2KI.003.013 ಎಲೀ ಷನು ಇಸ್ರಾಯೇಲಿನ ಅರಸನಿಗೆ -- ನಿನ್ನೊಂದಿಗೆ ನಾನೇನು ಮಾಡಬೇಕು? ನೀನು ನಿನ್ನ ತಂದೆ ತಾಯಿಯ ಪ್ರವಾದಿಗಳ ಬಳಿಗೆ ಹೋಗು ಅಂದನು. ಇಸ್ರಾಯೇ ಲಿನ ಅರಸನು ಅವನಿಗೆ--ಇಲ್ಲ, ಕರ್ತನು ಈ ಮೂರು ಮಂದಿ ಅರಸರುಗಳನ್ನು ಮೋವಾಬ್ಯರ ಕೈಯಲ್ಲಿ ಒಪ್ಪಿಸಿ ಕೊಡುವದಕ್ಕೆ ಒಟ್ಟಾಗಿ ಕರೆದಿದ್ದಾನಲ್ಲಾ ಅಂದನು.
3:14b.2KI.003.014 ಆಗ ಎಲೀಷನು--ನಾನು ಯಾವಾತನ ಸಮ್ಮುಖ ದಲ್ಲಿ ನಿಂತಿರುತ್ತೇನೋ ಆ ಸೈನ್ಯಗಳ ಕರ್ತನ ಜೀವದಾಣೆ, ನಿಶ್ಚಯವಾಗಿ ಯೆಹೂದದ ಅರಸನಾದ ಯೆಹೋಷಾ ಫಾಟನ ಸಮ್ಮುಖವನ್ನು ನಾನು ಗೌರವಿಸದಿದ್ದರೆ ನಾನು ನಿನ್ನ ಕಡೆ ಕಣ್ಣಿಡುವದಿಲ್ಲ, ನೋಡುವದೂ ಇಲ್ಲ.
3:15b.2KI.003.015 ಆದರೆ ಈಗ ವಾದ್ಯ ಬಾರಿಸುವವನನ್ನು ನನ್ನ ಬಳಿಗೆ ಕರಕೊಂಡು ಬಾ ಅಂದನು. ಆಗ ವಾದ್ಯ ಬಾರಿಸುವ ವನು ಬಾರಿಸಿದಾಗ ಕರ್ತನ ಕೈ ಅವನ ಮೇಲೆ ಬಂತು.
3:16b.2KI.003.016 ಅವನು ಹೇಳಿದ್ದೇನಂದರೆ -- ಈ ತಗ್ಗನ್ನು ಹಳ್ಳ ಕೊಳ್ಳಗಳಾಗಿ ಮಾಡಿರೆಂದು ಕರ್ತನು ಹೇಳುತ್ತಾನೆ.
3:17b.2KI.003.017 ಕರ್ತನು ಹೀಗೆ ಹೇಳುತ್ತಾನೆ--ನೀನು ಗಾಳಿಯನ್ನೂ ಮಳೆಯನ್ನೂ ನೋಡುವದಿಲ್ಲ; ಆದರೆ ನೀವು ನಿಮ್ಮ ದನಗಳೂ ನಿಮ್ಮ ಪಶುಗಳೂ ಕುಡಿಯುವ ಹಾಗೆ ಈ ತಗ್ಗು ನೀರಿನಿಂದ ತುಂಬಲ್ಪಡುವದು.
3:18b.2KI.003.018 ಇದಲ್ಲದೆ ಇದು ಕರ್ತನ ದೃಷ್ಟಿಗೆ ಅಲ್ಪವಾಗಿರುವದು; ಆತನು ಮೋವಾಬ್ಯರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿ ಕೊಡುವನು.
3:19b.2KI.003.019 ನೀವು ಕೋಟೆಯುಳ್ಳ ಎಲ್ಲಾ ಪಟ್ಟಣಗಳನ್ನೂ ಆದು ಕೊಳ್ಳತಕ್ಕ ಎಲ್ಲಾ ಪಟ್ಟಣಗಳನ್ನೂ ಹೊಡೆದು ಬಿಟ್ಟು ಉತ್ತಮವಾದ ಎಲ್ಲಾ ಮರಗಳನ್ನು ಬೀಳಮಾಡಿ ನೀರು ಬಾವಿಗಳನ್ನೆಲ್ಲಾ ಮುಚ್ಚಿ ಉತ್ತಮವಾದ ಭೂಮಿಯಲ್ಲಿ ರುವ ಹೊಲಗಳನ್ನೆಲ್ಲಾ ಕಲ್ಲುಗಳಿಂದ ತುಂಬಿಸಿ ಕೆಡಿಸ ಬೇಕು ಅಂದನು.
3:20b.2KI.003.020 ಉದಯದಲ್ಲಿ ಕಾಣಿಕೆಯನ್ನು ಅರ್ಪಿಸುತ್ತಿರುವಾಗ ಏನಾಯಿತಂದರೆ, ಇಗೋ, ನೀರು ಎದೋಮಿನ ಮಾರ್ಗವಾಗಿ ಬಂದದರಿಂದ ದೇಶವು ನೀರಿನಿಂದ ತುಂಬಲ್ಪಟ್ಟಿತು.
3:21b.2KI.003.021 ಅರಸುಗಳು ತಮ್ಮ ಸಂಗಡ ಯುದ್ಧಮಾಡುವದಕ್ಕೆ ಬಂದಿದ್ದಾರೆಂದು ಮೋವಾಬ್ಯರು ಕೇಳಿದಾಗ ಅವರು ಆಯುಧ ಧರಿಸತಕ್ಕ ಯೌವನಸ್ಥರು ಮೊದಲುಗೊಂಡು ಎಲ್ಲರನ್ನು ಕೂಡಿಸಿಕೊಂಡು ಮೇರೆಯಲ್ಲಿ ನಿಂತರು.
3:22b.2KI.003.022 ಮೋವಾಬ್ಯರು ಉದಯಕಾಲದಲ್ಲಿ ಎದ್ದು ಆ ನೀರಿನ ಮೇಲೆ ಸೂರ್ಯನ ಪ್ರಕಾಶ ಬಿದ್ದದ್ದರಿಂದ ಆ ನೀರು ರಕ್ತದ ಹಾಗೆ ಕೆಂಪಾಗಿರುವದನ್ನು ಕಂಡರು.
3:23b.2KI.003.023 ಆಗ ಅವರು--ಇದು ರಕ್ತವೇ; ಆ ಅರಸುಗಳು ತಮ್ಮ ತಮ್ಮೊ ಳಗೆ ಜಗಳವಾಡಿ ಒಬ್ಬರನ್ನೊಬ್ಬರು ಕೊಂದಿದ್ದಾರೆ; ಈಗ ಮೋವಾಬ್ಯರೇ, ಕೊಳ್ಳೆಗೆ ಬನ್ನಿರಿ ಎಂದು ಹೇಳಿ ಕೊಂಡರು.
3:24b.2KI.003.024 ಅವರು ಇಸ್ರಾಯೇಲಿನ ದಂಡಿಗೆ ಬಂದಾಗ ಇಸ್ರಾಯೇಲ್ಯರು ಎದ್ದು ಮೋವಾಬ್ಯರು ತಮ್ಮ ಮುಂದೆ ಓಡಿಹೋಗುವ ಹಾಗೆ ಅವರನ್ನು ಹೊಡೆದು ಮೋವಾಬ್ಯರನ್ನು ಅವರ ದೇಶದ ವರೆಗೂ ಹೊಡೆಯುತ್ತಾ ಬಂದರು.
3:25b.2KI.003.025 ಇದಲ್ಲದೆ ಅವರು ಪಟ್ಟಣ ಗಳನ್ನು ಕೆಡವಿಹಾಕಿ ಉತ್ತಮವಾದ ಹೊಲಗಳ ಮೇಲೆ ಕಲ್ಲನ್ನು ಹಾಕಿ ತುಂಬಿಸಿ ನೀರು ಬಾವಿಗಳನ್ನೆಲ್ಲಾ ಮುಚ್ಚಿ, ಎಲ್ಲಾ ಉತ್ತಮವಾದ ಮರಗಳನ್ನು ಬೀಳಮಾಡಿದರು. ಕೀರ್ಹರೆಷೆತಿನಲ್ಲಿ ಮಾತ್ರ ಅದರ ಕಲ್ಲುಗಳನ್ನು ಉಳಿಸಿ ಬಿಟ್ಟರು. ಆದರೆ ಕಲ್ಲೆಸೆಯುವವರು ಅದನ್ನೂ ಸುತ್ತಿ ಕೊಂಡು ಹೊಡೆದುಬಿಟ್ಟರು.
3:26b.2KI.003.026 ಯುದ್ಧವು ತನಗೆ ಅತಿ ಕಷ್ಟವಾಯಿತೆಂದು ಮೋವಾಬಿನ ಅರಸನು ಕಂಡಾಗ ಎದೋಮಿನ ಅರಸನ ಮೇಲೆ ಹೋಗಿ ಬೀಳುವ ನಿಮಿತ್ತ ಕತ್ತಿ ಹಿಡಿಯುವ ಏಳುನೂರು ಮಂದಿ ಯನ್ನು ತನ್ನ ಸಂಗಡ ತೆಗೆದುಕೊಂಡನು; ಆದರೆ ಅದು ಅವರಿಂದ ಆಗದೆ ಹೋಯಿತು.ಆಗ ಅವನು ತನಗೆ ಬದಲಾಗಿ ಆಳುವದಕ್ಕಿರುವ ತನ್ನ ಹಿರಿಯ ಮಗನನ್ನು ತಕ್ಕೊಂಡು ಅವನನ್ನು ಗೋಡೆಯ ಮೇಲೆ ದಹನ ಬಲಿಯಾಗಿ ಅರ್ಪಿಸಿದನು; ಇದರಿಂದ ಇಸ್ರಾ ಯೇಲ್ಯರ ಮೇಲೆ ಅವರಿಗೆ ಬಹು ರೌದ್ರ ಉಂಟಾದ ದರಿಂದ ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹಿಂತಿರುಗಿ ಹೋದರು.
3:27b.2KI.003.027 ಆಗ ಅವನು ತನಗೆ ಬದಲಾಗಿ ಆಳುವದಕ್ಕಿರುವ ತನ್ನ ಹಿರಿಯ ಮಗನನ್ನು ತಕ್ಕೊಂಡು ಅವನನ್ನು ಗೋಡೆಯ ಮೇಲೆ ದಹನ ಬಲಿಯಾಗಿ ಅರ್ಪಿಸಿದನು; ಇದರಿಂದ ಇಸ್ರಾ ಯೇಲ್ಯರ ಮೇಲೆ ಅವರಿಗೆ ಬಹು ರೌದ್ರ ಉಂಟಾದ ದರಿಂದ ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹಿಂತಿರುಗಿ ಹೋದರು.
4
4:1b.2KI.004.001 ಪ್ರವಾದಿಗಳ ಮಕ್ಕಳ ಹೆಂಡತಿಯರಲ್ಲಿ ಒಬ್ಬಳು ಎಲೀಷನಿಗೆ ಕೂಗಿ--ನಿನ್ನ ದಾಸ ನಾದ ನನ್ನ ಗಂಡನು ಸತ್ತನು; ನಿನ್ನ ದಾಸನು ಕರ್ತನಿಗೆ ಭಯಪಡುವವನಾಗಿದ್ದನೆಂದು ನೀನು ಬಲ್ಲೆ; ಈಗ ಸಾಲಗಾರನು ನನ್ನ ಇಬ್ಬರು ಮಕ್ಕಳನ್ನು ತನಗೆ ದಾಸ ರಾಗಿ ತೆಗೆದುಕೊಳ್ಳಲು ಬಂದಿದ್ದಾನೆ ಅಂದಳು.
4:2b.2KI.004.002 ಎಲೀ ಷನು ಅವಳಿಗೆ--ನಾನು ನಿನಗೆ ಏನು ಮಾಡಬೇಕು? ಮನೆಯಲ್ಲಿ ನಿನಗೆ ಏನು ಉಂಟು, ನನಗೆ ತಿಳಿಸು ಅಂದನು. ಅವಳು--ನಿನ್ನ ಸೇವಕಳಿಗೆ ಒಂದು ಮೊಗೆ ಎಣ್ಣೆ ಅಲ್ಲದೆ ಮನೆಯಲ್ಲಿ ಮತ್ತೊಂದಿಲ್ಲ ಅಂದಳು.
4:3b.2KI.004.003 ಆಗ ಅವನು--ನೀನು ಹೋಗಿ ಹೊರಗಿರುವ ನಿನ್ನ ಎಲ್ಲಾ ನೆರೆಮನೆಯವರಿಂದ ಬರೀ ಪಾತ್ರೆಗಳನ್ನು ಕೇಳಿಕೋ; ಸ್ವಲ್ಪಮಾತ್ರ ತಕ್ಕೊಳ್ಳಬೇಡ.
4:4b.2KI.004.004 ನೀನು ಒಳಗೆ ಪ್ರವೇಶಿಸಿ ನೀನೂ ನಿನ್ನ ಕುಮಾರರೂ ಬಾಗಲು ಮುಚ್ಚಿ ಕೊಂಡು ಎಣ್ಣೆಯನ್ನು ಆ ಪಾತ್ರೆಗಳಲ್ಲೆಲ್ಲಾ ಹೊಯಿದು ತುಂಬಿದ್ದನ್ನು ಒಂದು ಕಡೆ ಇರಿಸು ಅಂದನು.
4:5b.2KI.004.005 ಹೀಗೆ ಅವಳು ಅವನನ್ನು ಬಿಟ್ಟು ಹೋಗಿ ತಾನೂ ತನ್ನ ಕುಮಾರರೂ ಬಾಗಲು ಮುಚ್ಚಿದರು; ಇವರು ಅವಳ ಬಳಿಗೆ ಪಾತ್ರೆಗಳನ್ನು ತಕ್ಕೊಂಡು ಬಂದರು; ಅವಳು ಹೊಯಿದಳು.
4:6b.2KI.004.006 ಆ ಪಾತ್ರೆಗಳು ತುಂಬಿದ ತರುವಾಯ ಏನಾಯಿತಂದರೆ, ಅವಳು ತನ್ನ ಮಗನಿಗೆ--ಇನ್ನೊಂದು ಪಾತ್ರೆಯನ್ನು ನನ್ನ ಬಳಿಗೆ ತಕ್ಕೊಂಡು ಬಾ ಅಂದಳು. ಅವನು ಅವಳಿಗೆ--ಇನ್ನು ಪಾತ್ರೆ ಇಲ್ಲ ಅಂದನು.
4:7b.2KI.004.007 ಆಗ ಎಣ್ಣೆಯುಕ್ಕುವದು ನಿಂತು ಹೋಯಿತು. ಆಗ ಅವಳು ಬಂದು ದೇವರ ಮನುಷ್ಯನಿಗೆ ತಿಳಿಸಿದಳು. ಅವನು--ನೀನು ಹೋಗಿ ಆ ಎಣ್ಣೆಯನ್ನು ಮಾರಿ ನಿನ್ನ ಸಾಲವನ್ನು ತೀರಿಸಿ ಮಿಕ್ಕದ್ದರಿಂದ ನೀನೂ ನಿನ್ನ ಮಕ್ಕಳೂ ಜೀವನ ಮಾಡಿರಿ ಅಂದನು.
4:8b.2KI.004.008 ಆ ಕಾಲದಲ್ಲಿ ಏನಾಯಿತಂದರೆ, ಎಲೀಷನು ಶೂನೇ ಮಿಗೆ ಹೋದನು. ಅಲ್ಲಿ ಘನವುಳ್ಳ ಒಬ್ಬ ಸ್ತ್ರೀಯು ಇದ್ದಳು. ಅವಳು ಅವನನ್ನು ರೊಟ್ಟಿ ತಿನ್ನಲು ಬಲವಂತ ಮಾಡಿದಳು. ಹಾಗೆಯೇ ಅವನು ಆ ಮಾರ್ಗವಾಗಿ ಹೋಗುವಾಗೆಲ್ಲಾ ಅಲ್ಲಿ ರೊಟ್ಟಿ ತಿನ್ನಲು ಹೋಗುತ್ತಿ ದ್ದನು.
4:9b.2KI.004.009 ಆದದರಿಂದ ನನ್ನ ಗಂಡನಿಗೆ--ಇಗೋ, ನಮ್ಮ ಬಳಿಯಲ್ಲಿ ಯಾವಾಗಲೂ ಹಾದು ಹೋಗುವ ಇವನು ಪರಿಶುದ್ಧನಾದ ದೇವರ ಮನುಷ್ಯನಾಗಿದ್ದಾ ನೆಂದು ನನಗೆ ತಿಳಿಯುತ್ತದೆ.
4:10b.2KI.004.010 ನಾವು ಮಾಳಿಗೆಯ ಮೇಲೆ ಒಂದು ಚಿಕ್ಕ ಕೊಠಡಿಯನ್ನು ಕಟ್ಟಿಸಿ ಅದರಲ್ಲಿ ಅವನಿಗೋಸ್ಕರ ಮಂಚವನ್ನೂ ಮೇಜನ್ನೂ ಕುರ್ಚಿ ಯನ್ನೂ ದೀಪಸ್ತಂಭವನ್ನೂ ಇಡೋಣ. ಅವನು ನಮ್ಮ ಬಳಿಗೆ ಬರುವಾಗ ಅಲ್ಲಿ ಪ್ರವೇಶಿಸುವನು ಅಂದಳು.
4:11b.2KI.004.011 ಒಂದು ದಿನ ಅವನು ಅಲ್ಲಿಗೆ ಬಂದು ಆ ಕೊಠಡಿ ಯಲ್ಲಿ ಪ್ರವೇಶಿಸಿ ಮಲಗಿ ಎದ್ದ ಮೇಲೆ
4:12b.2KI.004.012 ಅವನು ತನ್ನ ಸೇವಕನಾದ ಗೇಹಜಿಗೆ--ನೀನು ಶೂನೇಮ್ಯಳನ್ನು ಕರೆ ಅಂದನು. ಅವನು ಅವಳನ್ನು ಕರೆದದ್ದರಿಂದ ಅವಳು ಬಂದು ಮುಂದೆ ನಿಂತಳು.
4:13b.2KI.004.013 ಅವನು ಗೇಹ ಜಿಗೆ--ನೀನು ಇಗೋ, ಈ ಸಕಲ ಚಿಂತೆಯಿಂದ ನಮಗೋಸ್ಕರ ಚಿಂತಿಸಿದಿ; ನಿನಗೆ ಮಾಡಬೇಕಾದ ದ್ದೇನು? ನಿನಗೋಸ್ಕರ ಅರಸನ ಸಂಗಡಲಾದರೂ ಸೈನ್ಯಾಧಿಪತಿಯ ಸಂಗಡಲಾದರೂ ಮಾತನಾಡ ಬೇಕೋ ಎಂದು ಇವಳಿಗೆ ಹೇಳು ಅಂದನು. ಅದಕ್ಕ ವಳು--ನನ್ನ ಸ್ವಜನರ ಮಧ್ಯದಲ್ಲಿ ನಾನು ವಾಸವಾಗಿ ದ್ದೇನೆ ಅಂದಳು.
4:14b.2KI.004.014 ಅವನು--ಹಾಗಾದರೆ ಅವಳಿಗೋ ಸ್ಕರ ಮಾಡಬೇಕಾದದ್ದೇನು ಅಂದನು. ಅದಕ್ಕೆ ಗೇಹ ಜಿಯು--ಅವಳು ಮಗುವಿಲ್ಲದೆ ಇದ್ದಾಳೆ; ಅವಳ ಗಂಡನು ಮುದುಕನಾಗಿದ್ದಾನೆ ಅಂದನು.
4:15b.2KI.004.015 ಪ್ರವಾ ದಿಯು--ಅವಳನ್ನು ಕರೆ ಅಂದನು. ಅವನು ಅವಳನ್ನು ಕರೆದಾಗ ಅವಳು ಬಾಗಲಲ್ಲಿ ನಿಂತಳು.
4:16b.2KI.004.016 ಆಗ ಅವನು--ನೀನು ಬರುವ ವರುಷ ಇದೇ ಕಾಲದಲ್ಲಿ ಒಬ್ಬ ಮಗನನ್ನು ಅಪ್ಪಿಕೊಳ್ಳುವಿ ಅಂದನು. ಅದಕ್ಕವಳುಹಾಗಲ್ಲ, ದೇವರ ಮನುಷ್ಯನೇ, ನನ್ನ ಒಡೆಯನೇ, ನಿನ್ನ ಸೇವಕಳಿಗೆ ನೀನು ಸುಳ್ಳು ಹೇಳಬೇಡ ಅಂದಳು.
4:17b.2KI.004.017 ಆ ಸ್ತ್ರೀಯು ಗರ್ಭಧರಿಸಿ ಎಲೀಷನು ತನಗೆ ಹೇಳಿದಂತೆ ಮುಂದಿನ ವರುಷ ಅದೇ ಕಾಲದಲ್ಲಿ ಒಬ್ಬ ಮಗನನ್ನು ಹೆತ್ತಳು.
4:18b.2KI.004.018 ಆದರೆ ಆ ಮಗುವು ಬೆಳೆದಾಗ ಒಂದು ದಿನ ಅವನು ಬೆಳೆ ಕೊಯ್ಯುವವರ ಬಳಿಯಲ್ಲಿರುವ ತನ್ನ ತಂದೆಯ ಬಳಿಗೆ ಹೋದನು.
4:19b.2KI.004.019 ಆಗ ಅವನು ತನ್ನ ತಂದೆಗೆ--ನನ್ನ ತಲೆ, ನನ್ನ ತಲೆ ಅಂದನು. ತಂದೆಯು ಒಬ್ಬ ಹುಡುಗನಿಗೆ--ಅವನನ್ನು ಅವನ ತಾಯಿಯ ಬಳಿಗೆ ಎತ್ತಿಕೊಂಡು ಹೋಗು ಅಂದನು.
4:20b.2KI.004.020 ಹುಡು ಗನು ಅವನನ್ನು ಅವನ ತಾಯಿಯ ಬಳಿಗೆ ಎತ್ತಿಕೊಂಡು ಹೋದನು. ಅವನು ಮಧ್ಯಾಹ್ನದ ವರೆಗೂ ಅವಳ ತೊಡೆಯ ಮೇಲೆ ಇದ್ದುಕೊಂಡು ಸತ್ತುಹೋದನು.
4:21b.2KI.004.021 ಆಗ ಅವಳು ಏರಿ ಹೋಗಿ ಅವನನ್ನು ದೇವರ ಮನುಷ್ಯನ ಮಂಚದಮೇಲೆ ಮಲಗಿಸಿ ಅವನಿಗೋಸ್ಕರ ಬಾಗಲು ಹಾಕಿ ಹೊರಟು ತನ್ನ ಗಂಡನನ್ನು ಕರೆದು --
4:22b.2KI.004.022 ನಾನು ದೇವರ ಮನುಷ್ಯನ ಬಳಿಗೆ ಓಡಿಹೋಗಿ ತಿರುಗಿ ಬರುವ ಹಾಗೆ ನೀನು ದಯಮಾಡಿ ಯೌವನ ಸ್ಥರಲ್ಲಿ ಒಬ್ಬನನ್ನೂ ಕತ್ತೆಗಳಲ್ಲಿ ಒಂದನ್ನೂ ನನಗೆ ಕಳುಹಿಸು ಅಂದಳು.
4:23b.2KI.004.023 ಅದಕ್ಕೆ ಅವನು--ಇಂದು ಅಮಾವಾಸ್ಯೆ ಯಲ್ಲ, ಸಬ್ಬತ್ತೂ ಅಲ್ಲ; ಯಾಕೆ ನೀನು ಈ ಹೊತ್ತು ಅವನ ಬಳಿಗೆ ಹೋಗುತ್ತೀ ಅಂದನು. ಅದಕ್ಕವಳು --ಒಳ್ಳೇದಾಗಿರುವದು ಅಂದಳು.
4:24b.2KI.004.024 ಆಗ ಅವಳು ಕತ್ತೆಯ ಮೇಲೆ ತಡಿಯನ್ನು ಹಾಕಿಸಿ ತನ್ನ ಸೇವಕನಿಗೆ --ನಡಿಸಿಕೊಂಡು ಹೋಗು; ನಾನು ನಿನಗೆ ಹೇಳುವ ವರೆಗೂ ನನಗೋಸ್ಕರ ಸವಾರಿಯನ್ನು ತಡಮಾಡ ಬೇಡವೆಂದು ಹೇಳಿ ಕರ್ಮೆಲು ಬೆಟ್ಟದಲ್ಲಿರುವ ದೇವರ ಮನುಷ್ಯನ ಬಳಿಗೆ ಬಂದಳು.
4:25b.2KI.004.025 ಆಗ ಏನಾಯಿತಂದರೆ, ದೇವರ ಮನುಷ್ಯನು ದೂರದಿಂದ ಅವಳನ್ನು ನೋಡಿ ಅವನು ತನ್ನ ಸೇವಕನಾದ ಗೇಹಜಿಗೆ -- ಇಗೋ, ಆ ಶೂನೇಮ್ಯಳು.
4:26b.2KI.004.026 ನೀನು ಅವಳನ್ನು ಎದುರುಗೊ ಳ್ಳಲು ಓಡಿಹೋಗಿ ಅವಳಿಗೆ--ನಿನಗೆ ಕ್ಷೇಮವೋ? ನಿನ್ನ ಗಂಡನಿಗೆ ಕ್ಷೇಮವೋ? ಮಗುವಿಗೆ ಕ್ಷೇಮವೋ ಎಂದು ಕೇಳು ಅಂದನು.
4:27b.2KI.004.027 ಅವಳು--ಕ್ಷೇಮವು ಅಂದಳು. ಅವಳು ಬೆಟ್ಟದ ಮೇಲಿದ್ದ, ದೇವರ ಮನು ಷ್ಯನ ಬಳಿಗೆ ಬಂದು ಅವನ ಪಾದಗಳನ್ನು ಹಿಡಿದಳು. ಆದರೆ ಅವಳನ್ನು ತಳ್ಳಲು ಗೇಹಜಿಯು ಹತ್ತಿರ ಬಂದ ದರಿಂದ ದೇವರ ಮನುಷ್ಯನು--ಅವಳನ್ನು ಬಿಡು; ಅವಳ ಹೃದಯದಲ್ಲಿ ದುಃಖವಿದೆ; ಕರ್ತನು ಅದನ್ನು ನನಗೆ ತಿಳಿಸದೆ ಮರೆಮಾಡಿದ್ದಾನೆ ಅಂದನು.
4:28b.2KI.004.028 ಆಗ ಅವಳು--ನಾನು ನನ್ನ ಒಡೆಯನಿಂದ ಕುಮಾರನನ್ನು ಕೇಳಿಕೊಂಡೆನೋ? ನನ್ನನ್ನು ಮೋಸಗೊಳಿಸಬೇಡ ವೆಂದು ನಾನು ಹೇಳಲಿಲ್ಲವೋ ಅಂದಳು.
4:29b.2KI.004.029 ಆಗ ಅವನು ಗೇಹಜಿಗೆ--ನೀನು ನಿನ್ನ ನಡುವನ್ನು ಕಟ್ಟಿ ಕೊಂಡು ನನ್ನ ಕೋಲನ್ನು ನಿನ್ನ ಕೈಯಲ್ಲಿ ಹಿಡುಕೊಂಡು ಹೋಗು. ನಿನಗೆ ಯಾವನಾದರೂ ಎದುರುಗೊಂಡರೆ ಅವನನ್ನು ವಂದಿಸಬೇಡ; ಯಾವನಾದರೂ ನಿನ್ನನ್ನು ವಂದಿಸಿದರೆ ಅವನಿಗೆ ಪ್ರತ್ಯುತ್ತರ ಹೇಳಬೇಡ; ನನ್ನ ಕೋಲನ್ನು ಆ ಹುಡುಗನ ಮುಖದ ಮೇಲೆ ಹಾಕು ಅಂದನು.
4:30b.2KI.004.030 ಆದರೆ ಹುಡುಗನ ತಾಯಿ--ಕರ್ತನ ಜೀವದಾಣೆ, ಮತ್ತು ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದಳು.
4:31b.2KI.004.031 ಆಗ ಅವನೆದ್ದು ಅವಳ ಹಿಂದೆ ಹೋದನು. ಗೇಹಜಿಯು ಅವರಿಗೆ ಮುಂದಾಗಿ ಹೋಗಿ ಆ ಕೋಲನ್ನು ಹುಡುಗನ ಮುಖದ ಮೇಲೆ ಇಟ್ಟನು. ಆದರೆ ಶಬ್ದವಾದರೂ ಆಲೈಸುವದಾದರೂ ಇಲ್ಲದೆ ಇತ್ತು. ಆದದರಿಂದ ಅವನು ಎದುರುಗೊಳ್ಳಲು ತಿರಿಗಿ ಹೋಗಿ ಎಲೀಷನಿಗೆ--ಹುಡುಗನು ಎಚ್ಚರವಾಗ ಲಿಲ್ಲ ಅಂದನು.
4:32b.2KI.004.032 ಎಲೀಷನು ಮನೆಯಲ್ಲಿ ಬಂದಾಗ ಇಗೋ, ಆ ಹುಡುಗನು ಸತ್ತವನಾಗಿದ್ದು ತನ್ನ ಮಂಚದ ಮೇಲೆ ಮಲಗಿಸಲ್ಪಟ್ಟಿದ್ದನು.
4:33b.2KI.004.033 ಅವನು ಒಳಗೆ ಪ್ರವೇ ಶಿಸಿ ಯಾರೂ ಒಳಗೆ ಬಾರದಂತೆ ಆ ಕೋಣೆಯ ಬಾಗಲು ಮುಚ್ಚಿಕೊಂಡು ಕರ್ತನನ್ನು ಪ್ರಾರ್ಥಿಸಿದನು.
4:34b.2KI.004.034 ಅವನು ಏರಿಹೋಗಿ ಮಗುವಿನ ಮೇಲೆ ಮಲಗಿ ಕೊಂಡು ತನ್ನ ಬಾಯಿಯನ್ನು ಅವನ ಬಾಯಿಯ ಮೇಲೆಯೂ ತನ್ನ ಕಣ್ಣುಗಳನ್ನು ಅವನ ಕಣ್ಣುಗಳ ಮೇಲೆಯೂ ತನ್ನ ಕೈಗಳನ್ನು ಅವನ ಕೈಗಳ ಮೇಲೆಯೂ ಇರಿಸಿದನು. ಅವನು ಮೇಲೆ ಬೋರ್ಲಬಿದ್ದದರಿಂದ ಮಗುವಿನ ಶರೀರವು ಬೆಚ್ಚಗೆ ಆಯಿತು.
4:35b.2KI.004.035 ಆಗ ಅವನು ತಿರುಗಿ ಬಂದು ಮನೆಯಲ್ಲಿ ಸ್ವಲ್ಪಹೊತ್ತು ಅತ್ತಿತ್ತ ತಿರುಗಾಡಿ ಏರಿಹೋಗಿ ಅವನ ಮೇಲೆ ಬೋರ್ಲ ಬಿದ್ದನು. ಆಗ ಆ ಹುಡುಗನು ಏಳು ಸಾರಿ ಸೀತು ತರುವಾಯ ತನ್ನ ಕಣ್ಣುಗಳನ್ನು ತೆರೆದನು.
4:36b.2KI.004.036 ಆಗ ಅವನು ಗೇಹಜಿಯನ್ನು ಕರೆದು--ಶೂನೇಮ್ಯಳನ್ನು ಕರೆ ಅಂದನು. ಅವನು ಅವಳನ್ನು ಕರೆದನು. ಅವಳು ಬಂದಾಗ ಅವನು--ನಿನ್ನ ಕುಮಾರನನ್ನು ತಕ್ಕೊಂಡು ಹೋಗು ಅಂದನು.
4:37b.2KI.004.037 ಆಗ ಅವಳು ಬಂದು ಅವನ ಪಾದಗಳ ಮೇಲೆ ಬಿದ್ದು ಸಾಷ್ಟಾಂಗ ನಮಸ್ಕಾರ ಮಾಡಿ ತನ್ನ ಮಗನನ್ನು ಎತ್ತಿಕೊಂಡು ಹೋದಳು.
4:38b.2KI.004.038 ಎಲೀಷನು ತಿರುಗಿ ಗಿಲ್ಗಾಲಿಗೆ ಬಂದಾಗ ದೇಶ ದಲ್ಲಿ ಬರ ಉಂಟಾಗಿತ್ತು. ಪ್ರವಾದಿಗಳ ಮಕ್ಕಳು ಅವನ ಮುಂದೆ ಕುಳಿತಿರುವಾಗ ಅವನು ತನ್ನ ಸೇವಕನಿಗೆನೀನು ದೊಡ್ಡ ಗಡಿಗೆಯನ್ನು ಮೇಲಿಟ್ಟು ಪ್ರವಾದಿಗಳ ಮಕ್ಕಳಿಗೋಸ್ಕರ ಆಹಾರವನ್ನು ಬೇಯಿಸು ಅಂದನು.
4:39b.2KI.004.039 ಒಬ್ಬನು ಪಲ್ಯವನ್ನು ತರಲು ಅಡವಿಗೆ ಹೋಗಿ ಅಡವಿಯ ಬಳ್ಳಿಯನ್ನು ನೋಡಿ ಅಡವಿಯ ಕಾಯಿ ಗಳನ್ನು ತನ್ನ ಉಡಿಯ ತುಂಬ ಕೂಡಿಸಿಕೊಂಡು ಬಂದು ಅವುಗಳನ್ನು ಕೊಯಿದು ಆಹಾರವಿರುವ ಗಡಿಗೆಯಲ್ಲಿ ಹಾಕಿದನು; ಯಾಕಂದರೆ ಅವರು ಅವುಗಳನ್ನು ಅರಿ ಯದೆ ಇದ್ದರು.
4:40b.2KI.004.040 ಜನರಿಗೆ ಅದನ್ನು ತಿನ್ನುವದಕ್ಕೆ ಬಡಿಸಿದರು. ಆಹಾರವನ್ನು ತಿನ್ನುತ್ತಿರುವಾಗ ಏನಾಯಿ ತಂದರೆ, ಅವರು--ದೇವರ ಮನುಷ್ಯನೇ, ಗಡಿಗೆಯಲ್ಲಿ ವಿಷ ಎಂದು ಕೂಗಿದರು. ಯಾಕಂದರೆ ಅದರಲ್ಲಿದ್ದದ್ದನ್ನು ಅವರು ತಿನ್ನಲಾರದೆ ಇದ್ದರು.
4:41b.2KI.004.041 ಆಗ ಅವನು ಹಿಟ್ಟನ್ನು ತಕ್ಕೊಂಡು ಬರ ಹೇಳಿ ಅದನ್ನು ಗಡಿಗೆಯಲ್ಲಿ ಹಾಕಿ ಜನರು ತಿನ್ನುವದಕ್ಕೆ ಬಡಿಸಿರಿ ಅಂದನು. ಆಗ ಆ ಗಡಿಗೆಯಲ್ಲಿ ಕೆಟ್ಟದ್ದೇನೂ ಇರಲಿಲ್ಲ.
4:42b.2KI.004.042 ಇದಲ್ಲದೆ ಬಾಳ್‌ಷಾಲಿಷಾದಿಂದ ಒಬ್ಬ ಮನು ಷ್ಯನು ದೇವರ ಮನುಷ್ಯನಿಗೆ ಮೊದಲ ಫಲವಾದ ಜವೆಗೋದಿಯ ಇಪ್ಪತ್ತು ರೊಟ್ಟಿಗಳನ್ನೂ ಕಾಳಿ ನಿಂದ ತುಂಬಿದ ತೆನೆಗಳನ್ನೂ ತಕ್ಕೊಂಡು ಬಂದನು.
4:43b.2KI.004.043 ಆಗ ಅವನು--ಜನರಿಗೆ ಕೊಡು; ಅವರು ತಿನ್ನಲಿ ಅಂದನು. ಆದರೆ ಅವನ ಸೇವಕನು ಇದನ್ನು ನೂರು ಮಂದಿಗೆ ಬಡಿಸುವದು ಹೇಗೆ ಅಂದನು. ಅದಕ್ಕವನು -- ಜನರಿಗೆ ಕೊಡು; ಅವರು ತಿನ್ನಲಿ; ಅವರು ತಿಂದು ಇನ್ನೂ ಉಳಿಸಿ ಬಿಡುವರೆಂದು ಕರ್ತನು ಹೇಳುತ್ತಾನೆ ಅಂದನು.ಹಾಗೆಯೇ ಅವನು ಅವರ ಮುಂದೆ ಇಟ್ಟನು. ಕರ್ತನ ವಾಕ್ಯದ ಪ್ರಕಾರ ಅವರು ತಿಂದು ಉಳಿಸಿಟ್ಟರು.
4:44b.2KI.004.044 ಹಾಗೆಯೇ ಅವನು ಅವರ ಮುಂದೆ ಇಟ್ಟನು. ಕರ್ತನ ವಾಕ್ಯದ ಪ್ರಕಾರ ಅವರು ತಿಂದು ಉಳಿಸಿಟ್ಟರು.
5
5:1b.2KI.005.001 ಅರಾಮ್ಯರ ಅರಸನ ಸೈನ್ಯಾಧಿಪತಿಯಾದ ನಾಮಾನನು ತನ್ನ ಯಜಮಾನನ ಮುಂದೆ ದೊಡ್ಡವನಾಗಿಯೂ ಘನವುಳ್ಳವನಾಗಿಯೂ ಇದ್ದನು. ಕರ್ತನು ಅವನಿಂದ ಅರಾಮ್ಯರಿಗೆ ಬಿಡುಗಡೆಯನ್ನು ಉಂಟುಮಾಡಿದ್ದನು; ಇದಲ್ಲದೆ ಅವನು ಪರಾಕ್ರಮ ಶಾಲಿಯಾಗಿದ್ದನು. ಆದರೆ ಅವನು ಕುಷ್ಠರೋಗಿಯಾ ಗಿದ್ದನು.
5:2b.2KI.005.002 ಅರಾಮ್ಯರು ಗುಂಪುಗುಂಪಾಗಿ ಹೊರಟು ಇಸ್ರಾಯೇಲ್ ದೇಶದಿಂದ ಒಬ್ಬ ಹುಡುಗಿಯನ್ನು ಸೆರೆಯಾಗಿ ಹಿಡುಕೊಂಡು ಬಂದರು. ಅವಳು ನಾಮಾ ನನ ಹೆಂಡತಿಗೆ ಸೇವಕಳಾಗಿದ್ದಳು.
5:3b.2KI.005.003 ಅವಳು ತನ್ನ ಯಜಮಾನಿಗೆ--ನನ್ನ ದಣಿಯು ಸಮಾರ್ಯದಲ್ಲಿರುವ ಪ್ರವಾದಿಯ ಬಳಿಯಲ್ಲಿರುತ್ತಿದ್ದರೆ ಅವನು ಇವನ ಕುಷ್ಠರೋಗವನ್ನು ವಾಸಿಮಾಡುತ್ತಿದ್ದನು ಅಂದಳು.
5:4b.2KI.005.004 ಆಗ ಒಬ್ಬನು ಹೋಗಿ ಇಸ್ರಾಯೇಲ್ ದೇಶದ ಹುಡುಗಿಯು ಹೇಳಿದ್ದನ್ನು ತನ್ನ ಯಜಮಾನನಿಗೆ ತಿಳಿಸಿದನು.
5:5b.2KI.005.005 ಆದದರಿಂದ ಅರಾಮ್ಯರ ಅರಸನು--ನೀನು ಹೋಗಿ ಬಾ; ನಾನು ಇಸ್ರಾಯೇಲಿನ ಅರಸನಿಗೆ ಪತ್ರವನ್ನು ಕಳುಹಿಸುವೆನು ಅಂದನು. ಹಾಗೆಯೇ ಅವನು ಹತ್ತು ತಲಾಂತು ಬೆಳ್ಳಿಯನ್ನೂ ಆರು ಸಾವಿರ ಬಂಗಾರದ ನಾಣ್ಯಗಳನ್ನೂ ಹತ್ತು ದುಸ್ತು ಬಟ್ಟೆ ಗಳನ್ನೂ ತೆಗೆದುಕೊಂಡು ಹೋದನು.
5:6b.2KI.005.006 ಅವನು ಇಸ್ರಾಯೇಲಿನ ಅರಸನ ಬಳಿಗೆ ಆ ಪತ್ರವನ್ನು ತೆಗೆದು ಕೊಂಡು ಬಂದನು. ಅದರಲ್ಲಿ--ಈ ಪತ್ರ ನಿನಗೆ ಸೇರುವಾಗ ಇಗೋ, ನೀನು ನನ್ನ ಸೇವಕನಾದ ನಾಮಾ ನನಿಗಿರುವ ಕುಷ್ಠರೋಗವನ್ನು ವಾಸಿಮಾಡುವ ಹಾಗೆ ಅವನನ್ನು ನಿನ್ನ ಬಳಿಗೆ ಕಳುಹಿಸಿದ್ದೇನೆ ಎಂಬದು.
5:7b.2KI.005.007 ಇಸ್ರಾಯೇಲ್ಯರ ಅರಸನು ಆ ಪತ್ರವನ್ನು ಓದಿದ ಮೇಲೆ ತನ್ನ ವಸ್ತ್ರಗಳನ್ನು ಹರಿದುಕೊಂಡು--ಕೊಲ್ಲು ವದಕ್ಕೂ ಬದುಕಿಸುವದಕ್ಕೂ ನಾನು ದೇವರೋ? ಇವನ ಕುಷ್ಠರೋಗವನ್ನು ತಪ್ಪಿಸಿ ವಾಸಿಮಾಡುವದಕ್ಕೆ ನನ್ನ ಬಳಿಗೆ ಕಳುಹಿಸಿದ್ದೇನು? ಇವನು ನನಗೆ ವಿರೋಧ ವಾಗಿ ಜಗಳಕ್ಕೆ ಕಾರಣ ಹುಡುಕುವದನ್ನು ನೀವು ನೋಡಿ ತಿಳುಕೊಳ್ಳಿರಿ ಅಂದನು.
5:8b.2KI.005.008 ಇಸ್ರಾಯೇಲ್ಯರ ಅರಸನು ತನ್ನ ವಸ್ತ್ರಗಳನ್ನು ಹರಿದು ಕೊಂಡನೆಂದು ದೇವರ ಮನುಷ್ಯನಾದ ಎಲೀಷನು ಕೇಳಿದಾಗ--ನೀನು ನಿನ್ನ ವಸ್ತ್ರಗಳನ್ನು ಹರಿದುಕೊಂಡ ದ್ದೇನು? ಇಸ್ರಾಯೇಲಿನಲ್ಲಿ ಪ್ರವಾದಿ ಇದ್ದಾನೆಂದು ಅವನು ತಿಳುಕೊಳ್ಳುವ ಹಾಗೆ ಅವನು ನನ್ನ ಬಳಿಗೆ ಬರಲಿ ಎಂದು ಅರಸನಿಗೆ ಹೇಳಿ ಕಳುಹಿಸಿದನು.
5:9b.2KI.005.009 ಹಾಗೆಯೇ ನಾಮಾನನು ತನ್ನ ಕುದುರೆಗಳ ಸಂಗ ಡಲೂ ರಥದ ಸಂಗಡಲೂ ಬಂದು ಎಲೀಷನ ಮನೆಯ ಬಾಗಲ ಬಳಿಯಲ್ಲಿ ನಿಂತನು.
5:10b.2KI.005.010 ಆಗ ಎಲೀಷನುನೀನು ಹೋಗಿ ಯೊರ್ದನಿನಲ್ಲಿ ಏಳು ಸಾರಿ ಸ್ನಾನ ಮಾಡು; ಆಗ ನಿನ್ನ ಶರೀರವು ಮೊದಲಿನಂತೆ ಮಾರ್ಪ ಡುವದು; ನೀನು ಶುದ್ಧನಾಗುವಿ ಎಂದು ಹೇಳಿ ಅವನ ಬಳಿಗೆ ಸೇವಕನನ್ನು ಕಳುಹಿಸಿದನು.
5:11b.2KI.005.011 ಆಗ ನಾಮಾ ನನು ರೌದ್ರಗೊಂಡು ಹೊರಟು ಹೋಗಿ--ಇಗೋ, ಅವನು ನಿಶ್ಚಯವಾಗಿ ನನ್ನ ಬಳಿಗೆ ಹೊರಟುಬಂದು ತನ್ನ ದೇವರಾದ ಕರ್ತನ ಹೆಸರನ್ನು ಕರೆದು ಆ ಸ್ಥಳದ ಮೇಲೆ ತನ್ನ ಕೈಯಾಡಿಸಿ ಕುಷ್ಠರೋಗವನ್ನು ವಾಸಿ ಮಾಡುವನೆಂದು ನಾನು ಯೋಚಿಸಿಕೊಂಡೆನು.
5:12b.2KI.005.012 ನಾನು ಹೊಳೆಗಳಲ್ಲಿ ಸ್ನಾನ ಮಾಡಿ ಶುದ್ಧನಾಗುವ ಹಾಗೆ ದಮಸ್ಕದ ನದಿಗಳಾದ ಅಬಾನಾ ಪರ್ಪರ್ ಇಸ್ರಾಯೇಲಿನ ಎಲ್ಲಾ ನೀರಿಗಿಂತ ಉತ್ತಮವಲ್ಲವೋ ಎಂದು ಹೇಳಿ ತಿರುಗಿಕೊಂಡು ಕೋಪದಿಂದ ಹೋದನು.
5:13b.2KI.005.013 ಆದರೆ ಅವನ ಸೇವಕರು ನಾಮಾನನ ಬಳಿಗೆ ಬಂದು ಅವನ ಸಂಗಡ ಮಾತನಾಡಿ--ನನ್ನ ತಂದೆಯೇ, ಪ್ರವಾದಿಯು ದೊಡ್ಡ ಕಾರ್ಯವನ್ನು ನಿನಗೆ ಹೇಳಿದ್ದರೆ ನೀನು ಮಾಡುತ್ತಿದ್ದಿಯಲ್ಲವೋ? ಅವನು ನಿನಗೆ ಸ್ನಾನಮಾಡಿ ಶುದ್ಧನಾಗೆಂದು ಹೇಳಿದರೆ ಅಡ್ಡಿ ಏನು ಅಂದರು.
5:14b.2KI.005.014 ಆಗ ಅವನು ಇಳಿದುಹೋಗಿ ದೇವರ ಮನುಷ್ಯನ ವಾಕ್ಯದ ಪ್ರಕಾರ ಯೊರ್ದನಿನಲ್ಲಿ ಏಳುಸಾರಿ ಮುಣುಗಿದನು; ಆಗ ಅವನ ಶರೀರವು ಚಿಕ್ಕ ಮಗುವಿನ ಶರೀರದ ಹಾಗೆ ಮಾರ್ಪಟ್ಟಿತು; ಅವನು ಶುದ್ಧನಾದನು.
5:15b.2KI.005.015 ಆಗ ಅವನೂ ಅವನ ಎಲ್ಲಾ ಪರಿವಾರದವರೂ ದೇವರ ಮನುಷ್ಯನ ಬಳಿಗೆ ತಿರುಗಿ ಬಂದರು. ಅವನು ಪ್ರವಾದಿಯ ಮುಂದೆ ನಿಂತು--ಇಗೋ, ಇಸ್ರಾಯೇ ಲಿನಲ್ಲಿರುವ ದೇವರ ಹೊರತಾಗಿ ಭೂಮಿಯಲ್ಲೆ ಲ್ಲಿಯೂ ಬೇರೆ ದೇವರು ಇಲ್ಲವೆಂದು ನಾನು ಬಲ್ಲೆನು; ಆದಕಾರಣ ನೀನು ದಯಮಾಡಿ ನಿನ್ನ ಸೇವಕನಿಂದ ಕಾಣಿಕೆಯನ್ನು ತಕ್ಕೋ ಅಂದನು.
5:16b.2KI.005.016 ಆದರೆ ಅವನುನಾನು ಯಾವಾತನ ಮುಂದೆ ನಿಲ್ಲುತ್ತೇನೋ ಆ ಕರ್ತನ ಜೀವದಾಣೆ, ನಾನು ಏನೂ ತಕ್ಕೊಳ್ಳುವದಿಲ್ಲ ಅಂದ ನು. ಅವನು ತಕ್ಕೊಳ್ಳಬೇಕೆಂದು ನಾಮಾನನು ಬಲವಂತ ಮಾಡಿದರೂ ಬೇಡ ಅಂದನು.
5:17b.2KI.005.017 ಆಗ ನಾಮಾನನುಹಾಗಾದರೆ ಎರಡು ಹೇಸರ ಕತ್ತೆಗಳು ಹೊರತಕ್ಕ ಮಣ್ಣು ನಿನ್ನ ಸೇವಕನಿಗೆ ದಯಮಾಡಬೇಕಲ್ಲಾ. ನಿನ್ನ ಸೇವಕನು ಇನ್ನು ಮೇಲೆ ಕರ್ತನಿಗೆ ಹೊರತಾಗಿ ಅನ್ಯದೇವರುಗಳಿಗೆ ದಹನಬಲಿಯನ್ನಾದರೂ ಬಲಿ ಯನ್ನಾದರೂ ಅರ್ಪಿಸನು.
5:18b.2KI.005.018 ಈ ಕಾರ್ಯವನ್ನು ಕರ್ತನು ನಿನ್ನ ಸೇವಕನಿಗೆ ಮನ್ನಿಸಲಿ; ಏನಂದರೆ, ನನ್ನ ಯಜಮಾನನು ಆರಾಧನೆಗೋಸ್ಕರ ರಿಮ್ಮೋನನ ಮನೆಯಲ್ಲಿ ಪ್ರವೇಶಿಸಿ ಅವನು ನನ್ನ ಕೈಯ ಮೇಲೆ ಆತುಕೊಳ್ಳುವಾಗ ರಿಮ್ಮೋನನ ಮನೆಯಲ್ಲಿ ನಾನು ಅಡ್ಡಬಿದ್ದರೆ ಕರ್ತನು ನಿನ್ನ ಸೇವಕನಿಗೆ ಈ ಕಾರ್ಯವನ್ನು ಮನ್ನಿಸಲಿ ಅಂದನು.
5:19b.2KI.005.019 ಎಲೀಷನು ಅವನಿಗೆ--ಸಮಾ ಧಾನದಿಂದ ಹೋಗು ಅಂದನು. ಆಗ ಅವನನ್ನು ಬಿಟ್ಟು ಸ್ವಲ್ಪ ದೂರವಾಗಿ ಹೋದನು.
5:20b.2KI.005.020 ಆದರೆ ದೇವರ ಮನುಷ್ಯನಾದ ಎಲೀಷನ ಸೇವಕ ನಾಗಿರುವ ಗೇಹಜಿಯು--ಇಗೋ, ನನ್ನ ಯಜಮಾ ನನು ಈ ಅರಾಮ್ಯನಾದ ನಾಮಾನನು ತಕ್ಕೊಂಡು ಬಂದದ್ದನ್ನು ಅವನ ಕೈಯಿಂದ ತಕ್ಕೊಳ್ಳದೆ ಸುಮ್ಮನೆ ಕಳುಹಿಸಿದ್ದಾನೆ. ಆದರೆ ಕರ್ತನ ಜೀವದಾಣೆ, ನಾನು ಅವನ ಹಿಂದೆ ಓಡಿಹೋಗಿ ಅವನ ಕೈಯಿಂದ ಏನಾ ದರೂ ತಕ್ಕೊಳ್ಳುವೆನು ಅಂದುಕೊಂಡನು.
5:21b.2KI.005.021 ಹಾಗೆಯೇ ಗೇಹಜಿಯು ನಾಮಾನನ ಹಿಂದೆ ಹೋದನು. ನಾಮಾನನು ತನ್ನ ಹಿಂದೆ ಓಡಿ ಬರುವವನನ್ನು ನೋಡಿ ದಾಗ ಅವನನ್ನು ಎದುರುಗೊಳ್ಳಲು ರಥದಿಂದ ಇಳಿದು ಅವನಿಗೆ--ಎಲ್ಲಾ ಕ್ಷೇಮವೋ ಅಂದನು.
5:22b.2KI.005.022 ಅವನುಕ್ಷೇಮ; ಇಗೋ, ಪ್ರವಾದಿಗಳ ಮಕ್ಕಳಲ್ಲಿ ಇಬ್ಬರು ಯೌವನಸ್ಥರು ಎಫ್ರಾಯಾಮ್ ಬೆಟ್ಟದಿಂದ ಈಗಲೇ ನನ್ನ ಬಳಿಗೆ ಬಂದಿದ್ದಾರೆ; ನೀನು ದಯಮಾಡಿ ಅವರಿಗೆ ಒಂದು ತಲಾಂತು ಬೆಳ್ಳಿಯನ್ನೂ ಎರಡು ದುಸ್ತು ಬಟ್ಟೆ ಗಳನ್ನೂ ಕೊಡಬೇಕೆಂದು ನಿನಗೆ ಹೇಳು ಎಂದು ನನ್ನ ಯಜಮಾನನು ಕಳುಹಿಸಿದ್ದಾನೆ ಅಂದನು.
5:23b.2KI.005.023 ಆಗ ನಾಮಾನನು--ನೀನು ದಯಮಾಡಿ ಎರಡು ತಲಾಂತು ಗಳನ್ನು ತಕ್ಕೋ ಎಂದು ಹೇಳಿ ಅವನನ್ನು ಬಲವಂತ ಮಾಡಿದನು. ಹಾಗೆಯೇ ಎರಡು ತಲಾಂತು ಬೆಳ್ಳಿಯನ್ನು ಎರಡು ಚೀಲಗಳಲ್ಲಿ ಕಟ್ಟಿಸಿ ಅದರ ಸಂಗಡ ಎರಡು ದುಸ್ತು ಬಟ್ಟೆಗಳನ್ನು ಕೊಟ್ಟು ತನ್ನ ಸೇವಕರಲ್ಲಿ ಇಬ್ಬರ ಮೇಲೆ ಹೊರಿಸಿದನು; ಅವರು ಇವನ ಮುಂದೆ ಹೊತ್ತುಕೊಂಡು ಹೋದರು.
5:24b.2KI.005.024 ಅವನು ದುರ್ಗಕ್ಕೆ ಬಂದು ಅವುಗಳನ್ನು ಅವರ ಕೈಯಿಂದ ತಕ್ಕೊಂಡು ಮನೆಯಲ್ಲಿಟ್ಟು ಆ ಮನುಷ್ಯರನ್ನು ಕಳುಹಿಸಿಬಿಟ್ಟದ್ದರಿಂದ ಅವರು ಹೋದರು.
5:25b.2KI.005.025 ಆಗ ಇವನು ಒಳಗೆ ಪ್ರವೇಶಿಸಿ ತನ್ನ ಯಜಮಾನನ ಮುಂದೆ ನಿಂತನು. ಎಲೀಷನು ಅವನಿಗೆ--ಗೇಹಜಿಯೇ, ಎಲ್ಲಿಂದ ಬಂದಿ ಅಂದನು. ಅದಕ್ಕವನು--ನಿನ್ನ ಸೇವಕನು ಎಲ್ಲಿಗೂ ಹೋಗಲಿಲ್ಲ ಅಂದನು.
5:26b.2KI.005.026 ಆಗ ಅವನು ಇವನಿಗೆ--ಆ ಮನುಷ್ಯನು ನಿನ್ನನ್ನು ಎದುರುಗೊಳ್ಳಲು ತನ್ನ ರಥದಿಂದ ಇಳಿದು ನಿನ್ನ ಬಳಿಗೆ ಬಂದಾಗ ನನ್ನ ಹೃದಯವು ನಿನ್ನ ಸಂಗಡ ಹೋಗಲಿಲ್ಲವೋ? ದ್ರವ್ಯವನ್ನೂ ವಸ್ತ್ರಗಳನ್ನೂ ಆಲಿದ್ ತೋಪುಗಳನ್ನೂ ದ್ರಾಕ್ಷೆಯ ತೋಟಗಳನ್ನೂ ಕುರಿ ದನಗಳನ್ನೂ ದಾಸದಾಸಿಯರನ್ನೂ ಪಡಕೊಳ್ಳುವದಕ್ಕೆ ಇದು ಸಮಯವೋ?ಆದದರಿಂದ ನಾಮಾನನ ಕುಷ್ಠರೋಗವು ನಿನಗೂ ನಿನ್ನ ಸಂತಾನಕ್ಕೂ ನಿತ್ಯವಾಗಿ ಹತ್ತುವದು ಅಂದನು. ಆಗ ಅವನು ಮಂಜಿನ ಹಾಗೆಯೇ ಕುಷ್ಠರೋಗಿಯಾಗಿ ಅವನ ಸಮ್ಮುಖದಿಂದ ಹೊರಟುಹೋದನು.
5:27b.2KI.005.027 ಆದದರಿಂದ ನಾಮಾನನ ಕುಷ್ಠರೋಗವು ನಿನಗೂ ನಿನ್ನ ಸಂತಾನಕ್ಕೂ ನಿತ್ಯವಾಗಿ ಹತ್ತುವದು ಅಂದನು. ಆಗ ಅವನು ಮಂಜಿನ ಹಾಗೆಯೇ ಕುಷ್ಠರೋಗಿಯಾಗಿ ಅವನ ಸಮ್ಮುಖದಿಂದ ಹೊರಟುಹೋದನು.
6
6:1b.2KI.006.001 ಪ್ರವಾದಿಗಳ ಮಕ್ಕಳು ಎಲೀಷನಿಗೆ-- ಇಗೋ, ಈಗ ನಾವು ನಿನ್ನ ಸಂಗಡ ವಾಸವಾಗಿರುವ ಸ್ಥಳವು ನಮಗೆ ಇಕ್ಕಟ್ಟಾಗಿದೆ.
6:2b.2KI.006.002 ಅಪ್ಪಣೆ ಕೊಡು; ನಾವು ಯೊರ್ದನಿನ ವರೆಗೂ ಹೋಗಿ ಪ್ರತಿ ಮನುಷ್ಯನು ಅಲ್ಲಿಂದ ಒಂದೊಂದು ತೊಲೆಯನ್ನು ತಕ್ಕೊಂಡು ಬಂದು ವಾಸವಾಗಿರುವದಕ್ಕೆ ನಮಗೋ ಸ್ಕರ ಒಂದು ಸ್ಥಳವನ್ನು ಅಲ್ಲಿ ಮಾಡುವೆವು ಅಂದರು. ಅವನು--ಹೋಗಿರಿ ಅಂದನು.
6:3b.2KI.006.003 ಆಗ ಅವರಲ್ಲಿ ಒಬ್ಬನು--ನೀನು ದಯಮಾಡಿ ನಿನ್ನ ಸೇವಕರ ಸಂಗಡ ಬಾ ಅಂದನು. ಅದಕ್ಕವನು--ನಾನು ಬರುತ್ತೇನೆ ಅಂದನು.
6:4b.2KI.006.004 ಹಾಗೆಯೇ ಅವನು ಅವರ ಸಂಗಡ ಹೋದನು. ಅವರು ಯೊರ್ದನಿಗೆ ಬಂದು ಅಲ್ಲಿ ಮರಗಳನ್ನು ಕಡಿಯುತ್ತಿದ್ದರು.
6:5b.2KI.006.005 ಒಬ್ಬನು ತೊಲೆಯನ್ನು ಬೀಳಿಸುವಾಗ ಕೊಡಲಿಯು ನೀರಿನೊಳಗೆ ಬಿತ್ತು. ಆಗ ಅವನು--ಅಯ್ಯೋ! ಯಜಮಾನನೇ, ಅದು ಎರವಾಗಿ ತಕ್ಕೊಂಡದ್ದು ಎಂದು ಕೂಗಿ ಹೇಳಿದನು.
6:6b.2KI.006.006 ದೇವರ ಮನುಷ್ಯನು--ಅದು ಎಲ್ಲಿ ಬಿತ್ತು ಅಂದನು. ಇವನು ಅವನಿಗೆ ಆ ಸ್ಥಳವನ್ನು ತೋರಿಸಿದ ತರುವಾಯ ಅವನು ಒಂದು ಕಟ್ಟಿಗೆಯನ್ನು ಕಡಿದು ಅಲ್ಲಿ ಹಾಕಿದ್ದರಿಂದ ಆ ಕೊಡಲಿಯು ತೇಲಾಡಿತು.
6:7b.2KI.006.007 ಪ್ರವಾದಿಯು ಅವ ನಿಗೆ--ಅದನ್ನು ತೆಗೆದುಕೋ ಅಂದನು. ಹಾಗೆಯೇ ಅವನು ತನ್ನ ಕೈಯನ್ನು ಚಾಚಿ ಅದನ್ನು ತೆಗೆದುಕೊಂಡನು.
6:8b.2KI.006.008 ತರುವಾಯ ಅರಾಮ್ಯರ ಅರಸನು ಇಸ್ರಾಯೇಲಿನ ಮೇಲೆ ಯುದ್ಧಮಾಡುತ್ತಿದ್ದನು; ಇಂಥಿಂಥ ಸ್ಥಳದಲ್ಲಿ ತನ್ನ ದಂಡು ಇಳಿಯಬೇಕೆಂದು ತನ್ನ ಸೇವಕರ ಸಂಗಡ ಯೋಚನೆ ಮಾಡಿಕೊಂಡನು.
6:9b.2KI.006.009 ಆಗ ದೇವರ ಮನು ಷ್ಯನು ಇಸ್ರಾಯೇಲಿನ ಅರಸನಿಗೆ--ಅಂಥಾ ಸ್ಥಳವನ್ನು ಹಾದು ಹೋಗದೆ ಜಾಗ್ರತೆಯಾಗಿ ಇರು; ಯಾಕಂದರೆ ಅರಾಮ್ಯರು ಅಲ್ಲಿಗೆ ಇಳಿದು ಬಂದಿದ್ದಾರೆಂದು ಹೇಳಿ ಕಳುಹಿಸಿದನು.
6:10b.2KI.006.010 ಹೀಗೆಯೇ ದೇವರ ಮನುಷ್ಯನು ತನ್ನನ್ನು ಎಚ್ಚರಿಸಿ ತನಗೆ ಹೇಳಿದ ಸ್ಥಳಕ್ಕೆ ಇಸ್ರಾಯೇಲಿನ ಅರಸನು ಹೇಳಿಕಳುಹಿಸಿ ತನ್ನನ್ನು ರಕ್ಷಿಸಿಕೊಂಡನು; ಹೀಗಾದದ್ದು ಒಂದೆರಡು ಸಾರಿ ಮಾತ್ರವೇ ಅಲ್ಲ.
6:11b.2KI.006.011 ಆದದರಿಂದ ಅರಾಮ್ಯರ ಅರಸನ ಹೃದಯವು ಇದರ ನಿಮಿತ್ತ ಕಳವಳಗೊಂಡು ಅವನು ತನ್ನ ಸೇವಕರನ್ನು ಕರೆದು ಅವರಿಗೆ--ನಮ್ಮಲ್ಲಿ ಇಸ್ರಾಯೇ ಲಿನ ಅರಸನ ಕಡೆಯವನು ಯಾರು? ನೀವು ನನಗೆ ತಿಳಿಸುವದಿಲ್ಲವೋ ಅಂದನು.
6:12b.2KI.006.012 ಅವನ ಸೇವಕರಲ್ಲಿ ಒಬ್ಬನು--ನನ್ನ ಒಡೆಯನೇ, ಅರಸನೇ, ಯಾವನೂ ಇಲ್ಲ. ಆದರೆ ಇಸ್ರಾಯೇಲಿನಲ್ಲಿರುವ ಪ್ರವಾದಿಯಾದ ಎಲೀಷನು ಇದ್ದಾನೆ; ನೀನು ನಿನ್ನ ಮಲಗುವ ಮನೆ ಯಲ್ಲಿ ಹೇಳುವ ಮಾತುಗಳನ್ನು ಇಸ್ರಾಯೇಲಿನ ಅರಸ ನಿಗೆ ಹೇಳುತ್ತಾನೆ ಅಂದನು.
6:13b.2KI.006.013 ಆಗ ಅವನು--ನಾನು ಕಳುಹಿಸಿ ಅವನನ್ನು ಹಿಡಿಯುವ ಹಾಗೆ ನೀನು ಹೋಗಿ ಅವನು ಎಲ್ಲಿದ್ದಾನೋ ನೋಡಿರಿ ಅಂದನು. ಆಗ ಇಗೋ, ದೋತಾನಿನಲ್ಲಿದ್ದಾನೆಂದು ಅವನಿಗೆ ತಿಳಿಸಿದರು.
6:14b.2KI.006.014 ಆದದರಿಂದ ಅವನು ಅಲ್ಲಿಗೆ ಕುದುರೆ ಗಳನ್ನೂ ರಥಗಳನ್ನೂ ಮಹಾಸೈನ್ಯವನ್ನೂ ಕಳುಹಿಸಿ ದನು. ಅವರು ರಾತ್ರಿಯಲ್ಲಿ ಬಂದು ಪಟ್ಟಣವನ್ನು ಸುತ್ತಿಕೊಂಡರು.
6:15b.2KI.006.015 ದೇವರ ಮನುಷ್ಯನ ಸೇವಕನು ಉದಯದಲ್ಲಿ ಎದ್ದು ಹೊರಗೆ ಹೊರಟಾಗ ಇಗೋ, ಕುದುರೆಗಳೂ ರಥಗಳುಳ್ಳ ಸೈನ್ಯವೂ ಪಟ್ಟಣವನ್ನು ಸುತ್ತಿಕೊಂಡಿತು. ಆಗ ಆ ಸೇವಕನು ಅವನಿಗೆ--ಅಯ್ಯೋ, ನನ್ನ ಯಜಮಾನನೇ, ನಾವು ಏನು ಮಾಡು ವದು ಅಂದನು.
6:16b.2KI.006.016 ಅದಕ್ಕವನು--ಭಯಪಡಬೇಡ; ಅವರ ಸಂಗಡ ಇರುವವರಿಗಿಂತ ನಮ್ಮ ಸಂಗಡ ಇರುವ ವರು ಹೆಚ್ಚಾಗಿದ್ದಾರೆ ಅಂದನು.
6:17b.2KI.006.017 ಆಗ ಎಲೀಷನುಕರ್ತನೇ, ನೀನು ದಯಮಾಡಿ ಅವನು ನೋಡುವ ಹಾಗೆ ಅವನ ಕಣ್ಣುಗಳನ್ನು ತೆರೆ ಎಂದು ಪ್ರಾರ್ಥಿಸಿ ದನು. ಕರ್ತನು ಆ ಯೌವನಸ್ಥನ ಕಣ್ಣುಗಳನ್ನು ತೆರೆ ದಾಗ ಇಗೋ, ಎಲೀಷನ ಸುತ್ತಲೂ ಬೆಟ್ಟದಲ್ಲಿ ಬೆಂಕಿಯ ಕುದುರೆಗಳೂ ರಥಗಳೂ ತುಂಬಿರುವದನ್ನು ಅವನು ನೋಡಿದನು.
6:18b.2KI.006.018 ಅವರು ಇವನ ಬಳಿಗೆ ಇಳಿದು ಬಂದಾಗ ಎಲೀಷನು--ಕರ್ತನೇ, ನೀನು ದಯಮಾಡಿ ಈ ಜನರನ್ನು ಕುರುಡರನ್ನಾಗಿ ಮಾಡು ಎಂದು ಪ್ರಾರ್ಥಿ ಸಿದನು. ಆಗ ಎಲೀಷನ ಮಾತಿನ ಹಾಗೆಯೇ ಆತನು ಅವರನ್ನು ಕುರುಡರನ್ನಾಗಿ ಮಾಡಿದನು.
6:19b.2KI.006.019 ಆಗ ಎಲೀ ಷನು ಅವರಿಗೆ--ಇದು ಆ ಮಾರ್ಗವಲ್ಲ, ಇದು ಆ ಪಟ್ಟಣವಲ್ಲ, ನನ್ನ ಹಿಂದೆ ಬನ್ನಿರಿ; ನೀವು ಹುಡುಕುವ ಮನುಷ್ಯನ ಬಳಿಗೆ ನಿಮ್ಮನ್ನು ಬರಮಾಡುವೆನು ಎಂದು ಹೇಳಿ ಅವರನ್ನು ಸಮಾರ್ಯಕ್ಕೆ ನಡಿಸಿದನು.
6:20b.2KI.006.020 ಅವರು ಸಮಾರ್ಯಕ್ಕೆ ಬಂದಾಗ ಏನಾಯಿತಂದರೆ, ಎಲೀ ಷನು--ಕರ್ತನೇ, ಇವರು ನೋಡುವ ಹಾಗೆ ಇವರ ಕಣ್ಣುಗಳನ್ನು ತೆರೆ ಅಂದನು. ಆಗ ಕರ್ತನು ಅವರ ಕಣ್ಣುಗಳನ್ನು ತೆರೆದನು; ಅವರು ನೋಡಿದಾಗ ಇಗೋ, ಸಮಾರ್ಯದ ಮಧ್ಯದಲ್ಲಿದ್ದರು.
6:21b.2KI.006.021 ಇಸ್ರಾಯೇಲಿನ ಅರಸನು ಅವರನ್ನು ಕಂಡಾಗ ಎಲೀಷನಿಗೆ--ನನ್ನ ತಂದೆಯೇ, ನಾನು ಹೊಡೆಯಲೋ? ಹೊಡೆಯ ಲೋ? ಅಂದನು.
6:22b.2KI.006.022 ಅದಕ್ಕವನು--ಹೊಡೆಯಬೇಡ; ನೀನು ನಿನ್ನ ಕತ್ತಿಯಿಂದಲೂ ನಿನ್ನ ಬಿಲ್ಲಿನಿಂದಲೂ ಸೆರೆಯಾಗಿ ತೆಗೆದುಕೊಳ್ಳುವವರನ್ನು ಹೊಡೆಯುತ್ತೀ ಯೋ? ರೊಟ್ಟಿಯನ್ನೂ ನೀರನ್ನೂ ಇವರ ಮುಂದೆ ಇಡು; ಅವರು ತಿಂದು ಕುಡಿದು ತಮ್ಮ ಯಜಮಾನನ ಬಳಿಗೆ ಹೋಗಲಿ ಅಂದನು.
6:23b.2KI.006.023 ಆಗ ಅರಸನು ಅವರಿಗೋಸ್ಕರ ದೊಡ್ಡ ಔತಣ ಮಾಡಿಸಿದನು. ಅವರು ತಿಂದು ಕುಡಿದ ತರುವಾಯ ಅವರನ್ನು ಕಳುಹಿಸಿ ಬಿಟ್ಟನು. ಅವರು ತಮ್ಮ ಯಜಮಾನನ ಬಳಿಗೆ ಹೋದರು. ಅರಾಮ್ಯರ ದಂಡುಗಳು ಇಸ್ರಾಯೇಲ್ ದೇಶದಲ್ಲಿ ತಿರಿಗಿ ಬಾರದೆ ಹೋದವು.
6:24b.2KI.006.024 ಇದರ ತರುವಾಯ ಏನಾಯಿತಂದರೆ, ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿ ಕೊಂಡು ಹೊರಟುಹೋಗಿ ಸಮಾರ್ಯಕ್ಕೆ ಮುತ್ತಿಗೆ ಹಾಕಿದನು.
6:25b.2KI.006.025 ಆಗ ಸಮಾರ್ಯದಲ್ಲಿ ದೊಡ್ಡ ಬರ ಉಂಟಾಯಿತು. ಇಗೋ, ಒಂದು ಕತ್ತೆಯ ತಲೆಯು ಎಂಭತ್ತು ರೂಪಾಯಿಗಳಿಗೂ ಒಂದು ಪಾರಿವಾಳದ ಮಲವು ಐದು ರೂಪಾಯಿಗಳಿಗೂ ಮಾರಲ್ಪಡುವ ವರೆಗೂ ಅದನ್ನು ಮುತ್ತಿಗೆ ಹಾಕಿದನು.
6:26b.2KI.006.026 ಇಸ್ರಾ ಯೇಲಿನ ಅರಸನು ಗೋಡೆಯ ಮೇಲೆ ಹಾದು ಹೋಗುತ್ತಿರುವಾಗ ಒಬ್ಬ ಸ್ತ್ರೀಯು ಅವನನ್ನು ಬೇಡುವ ವಳಾಗಿ--ನನ್ನ ಯಜಮಾನನೇ, ಅರಸನೇ, ಸಹಾಯ ಮಾಡು ಅಂದಳು.
6:27b.2KI.006.027 ಅದಕ್ಕವನು--ಕರ್ತನು ನಿನ್ನನ್ನು ಸಂರಕ್ಷಿಸದೆ ಹೋದರೆ ನಾನು ಎಲ್ಲಿಂದ ನಿನ್ನನ್ನು ರಕ್ಷಿ ಸಲಿ? ಕಣದಿಂದಲೋ ಇಲ್ಲವೆ ದ್ರಾಕ್ಷೇ ಅಲೆಯಿಂದ ಲೋ ಅಂದನು.
6:28b.2KI.006.028 ಅರಸನು ಅವಳಿಗೆ--ನಿನ್ನ ದುಃಖ ವೇನು ಅಂದನು. ಅದಕ್ಕವಳು--ಈ ಸ್ತ್ರೀಯು ನನಗೆ ಹೇಳಿದ್ದೇನಂದರೆ--ಈ ಹೊತ್ತು ನಾವು ನಿನ್ನ ಮಗನನ್ನು ತಿನ್ನುವ ಹಾಗೆ ಅವನನ್ನು ಕೊಡು; ನಾಳೆ ನನ್ನ ಮಗನನ್ನು ತಿನ್ನೋಣ ಅಂದಳು.
6:29b.2KI.006.029 ಹಾಗೆಯೇ ನಾನು ನನ್ನ ಮಗನನ್ನು ಬೇಯಿಸಿ ತಿಂದೆವು. ಮಾರನೇ ದಿವಸದಲ್ಲಿ ನಾನು ಅವಳಿಗೆ--ನಾವು ನಿನ್ನ ಮಗನನ್ನು ತಿನ್ನುವ ಹಾಗೆ ಅವನನ್ನು ಕೊಡು ಅಂದೆನು. ಆದರೆ ಅವಳು ತನ್ನ ಮಗನನ್ನು ಬಚ್ಚಿಟ್ಟಿದ್ದಾಳೆ ಅಂದಳು.
6:30b.2KI.006.030 ಅರಸನು ಆ ಸ್ತ್ರೀಯು ಹೇಳಿದ ಮಾತುಗಳನ್ನು ಕೇಳಿದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡು ಗೋಡೆಯ ಮೇಲೆ ಹಾದುಹೋದನು. ಜನರು ನೋಡಿದಾಗ ಇಗೋ, ಒಳಗೆ ಅವನ ಶರೀರದ ಮೇಲೆ ಗೋಣಿತಟ್ಟು ಇತ್ತು.
6:31b.2KI.006.031 ಆಗ ಅವನು -- ಶಾಫಾಟನ ಮಗನಾದ ಎಲೀಷನ ತಲೆಯು ಈ ದಿನ ಅವನ ಮೇಲೆ ಇದ್ದರೆ ದೇವರು ನನಗೆ ಇದರಂತೆಯೂ ಇನ್ನು ಹೆಚ್ಚಾಗಿಯೂ ಮಾಡಲಿ ಅಂದನು.
6:32b.2KI.006.032 ಎಲೀಷನು ಹಿರಿಯರ ಜೊತೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು; ಆಗ ಅರಸನು ತನ್ನ ಬಳಿಯಿಂದ ಒಬ್ಬ ಮನುಷ್ಯನನ್ನು ಕಳುಹಿಸಿದನು. ಆ ಸೇವಕನು ಎಲೀಷನ ಬಳಿಗೆ ಬರುವದಕ್ಕಿಂತ ಮುಂಚೆ ಅವನು ಹಿರಿಯರಿಗೆ--ಈ ಕೊಲೆಪಾತಕನ ಮಗನು ನನ್ನ ತಲೆ ಯನ್ನು ತೆಗೆಯುವದಕ್ಕೆ ಕಳುಹಿಸಿದ್ದನ್ನು ನೋಡಿದಿರೋ? ನೋಡಿರಿ; ಆ ಸೇವಕನು ಬಂದ ಕೂಡಲೆ ಬಾಗಲು ಮುಚ್ಚಿ ಬಾಗಲ ಬಳಿಯಲ್ಲಿ ಅವನನ್ನು ಗಟ್ಟಿಯಾಗಿ ಹಿಡಿದುಕೊಳ್ಳಿರಿ. ಅವನ ಯಜಮಾನನ ಪಾದಗಳ ಶಬ್ದವು ಅವನ ಹಿಂದೆ ಇಲ್ಲವೋ ಅಂದನು.ಅವನು ಅವರ ಸಂಗಡ ಇನ್ನೂ ಮಾತನಾಡುತ್ತಿರುವಾಗ ಇಗೋ, ಆ ಸೇವಕನು ತನ್ನ ಬಳಿಗೆ ಬಂದು--ಇಗೋ, ಈ ಕೇಡು ಕರ್ತನಿಂದ ಉಂಟಾಯಿತು; ನಾನು ಇನ್ನೂ ಕರ್ತನನ್ನು ನಿರೀಕ್ಷಿಸುವದೇನು ಅಂದನು.
6:33b.2KI.006.033 ಅವನು ಅವರ ಸಂಗಡ ಇನ್ನೂ ಮಾತನಾಡುತ್ತಿರುವಾಗ ಇಗೋ, ಆ ಸೇವಕನು ತನ್ನ ಬಳಿಗೆ ಬಂದು--ಇಗೋ, ಈ ಕೇಡು ಕರ್ತನಿಂದ ಉಂಟಾಯಿತು; ನಾನು ಇನ್ನೂ ಕರ್ತನನ್ನು ನಿರೀಕ್ಷಿಸುವದೇನು ಅಂದನು.
7
7:1b.2KI.007.001 ಆಗ ಎಲೀಷನು--ನೀವು ಕರ್ತನ ವಾಕ್ಯವನ್ನು ಕೇಳಿರಿ; ಕರ್ತನು ಹೀಗೆ ಹೇಳು ತ್ತಾನೆ -- ನಾಳೆ ಹೆಚ್ಚು ಕಡಿಮೆ ಇಷ್ಟು ಹೊತ್ತಿಗೆ ಸಮಾರ್ಯದ ಬಾಗಲಲ್ಲಿ ಒಂದು ಸೇರು ನಯವಾದ ಹಿಟ್ಟು ಒಂದು ಶೇಕೆಲಿಗೂ ಎರಡು ಸೇರು ಜವೆ ಗೋದಿಯು ಒಂದು ಶೇಕೆಲಿಗೂ ಮಾರಲ್ಪಡುವವು ಅಂದನು.
7:2b.2KI.007.002 ಆಗ ಅರಸನಿಗೆ ಹಸ್ತಕನಾದ ಅಧಿಕಾರಿಯು ದೇವರ ಮನುಷ್ಯನಿಗೆ ಪ್ರತ್ಯುತ್ತರವಾಗಿ -- ಇಗೋ, ಕರ್ತನು ಆಕಾಶದಲ್ಲಿ ಕಿಟಕಿಗಳನ್ನು ಮಾಡಿದರೂ ಸಂಭವಿಸಲಾರದು ಅನ್ನಲು ಎಲೀಷನು ಅವನಿಗೆ ಈ ಕಾರ್ಯವನ್ನು ನೀನು ನಿನ್ನ ಕಣ್ಣುಗಳಿಂದ ನೋಡುವಿ; ಆದರೆ ಅದನ್ನು ತಿನ್ನುವದಿಲ್ಲ ಅಂದನು.
7:3b.2KI.007.003 ಆಗ ಊರು ಬಾಗಲ ದ್ವಾರದಲ್ಲಿ ನಾಲ್ಕುಮಂದಿ ಕುಷ್ಠರೋಗಿಗಳು ಇದ್ದರು. ಅವರು ಒಬ್ಬರಿಗೊಬ್ಬರುನಾವು ಸಾಯುವ ವರೆಗೂ ಇಲ್ಲಿ ಕುಳಿತುಕೊಂಡಿ ರುವದೇನು?
7:4b.2KI.007.004 ನಾವು ಪಟ್ಟಣದಲ್ಲಿ ಪ್ರವೇಶಿಸುವೆವು ಅಂದರೆ ಪಟ್ಟಣದಲ್ಲಿ ಬರವಿರುವದರಿಂದ ಅಲ್ಲಿ ಸಾಯುತ್ತೇವೆ; ಇಲ್ಲಿ ನಾವು ಕುಳಿತಿದ್ದರೂ ಹಾಗೆಯೇ ಸಾಯು ತ್ತೇವೆ. ಆದದರಿಂದ ನಾವು ಅರಾಮ್ಯರ ಪಾಳೆಯಕ್ಕೆ ಹೋಗೋಣ ಬನ್ನಿರಿ; ಅವರು ನಮ್ಮನ್ನು ಬದುಕಿಸಿದರೆ ಬದುಕುವೆವು, ಸಾಯಿಸಿದರೆ ಸಾಯುವೆವು ಅಂದು ಕೊಂಡರು.
7:5b.2KI.007.005 ಹಾಗೆಯೇ ಸಂಜೆಯಲ್ಲಿ ಎದ್ದು ಅರಾಮ್ಯರ ಪಾಳೆಯಕ್ಕೆ ಹೋಗಲು ಅವರು ಅರಾಮ್ಯರ ಪಾಳೆಯದ ಅಂಚಿಗೆ ಬಂದಾಗ ಇಗೋ, ಅಲ್ಲಿ ಯಾರೂ ಇರಲಿಲ್ಲ.
7:6b.2KI.007.006 ಕರ್ತನು ಪಾಳೆಯದಲ್ಲಿರುವ ಅರಾಮ್ಯರಿಗೆ ರಥಗಳ ಶಬ್ದವೂ ಕುದುರೆಗಳ ಶಬ್ದವೂ ಮಹಾಸೈನ್ಯದ ಶಬ್ದವೂ ಕೇಳಲ್ಪಡುವಂತೆ ಮಾಡಿದ್ದರಿಂದ ಅವರು ಒಬ್ಬರಿಗೊ ಬ್ಬರು--ಇಗೋ, ಇಸ್ರಾಯೇಲಿನ ಅರಸನು ನಮ್ಮ ಮೇಲೆ ಬೀಳಲು ಹಿತ್ತಿಯರ ಅರಸುಗಳನ್ನೂ ಐಗುಪ್ತದ ಅರಸುಗಳನ್ನೂ ಕೂಲಿಗೆ ಕರೆದಿದ್ದಾನೆ ಅಂದುಕೊಂಡರು.
7:7b.2KI.007.007 ಅವರು ಸಂಜೆಯಲ್ಲಿ ಎದ್ದು ಪಾಳೆಯದಲ್ಲಿದ್ದ ಹಾಗೆ ತಮ್ಮ ಗುಡಾರಗಳನ್ನೂ ಕುದುರೆಗಳನ್ನೂ ಕತ್ತೆಗಳನ್ನೂ ಬಿಟ್ಟು ಬಿಟ್ಟು ತಮ್ಮ ಪ್ರಾಣಕ್ಕೋಸ್ಕರ ಓಡಿಹೋದರು.
7:8b.2KI.007.008 ಆ ಕುಷ್ಠರೋಗಿಗಳು ದಂಡಿನ ಅಂಚಿನ ವರೆಗೂ ಬಂದು ಒಂದು ಡೇರೆಯಲ್ಲಿ ಪ್ರವೇಶಿಸಿ ಅಲ್ಲಿ ತಿಂದು ಕುಡಿದು ಅಲ್ಲಿದ್ದ ಬೆಳ್ಳಿ ಬಂಗಾರವನ್ನೂ ವಸ್ತ್ರಗಳನ್ನೂ ತೆಗೆದುಕೊಂಡು ಹೋಗಿ ಬಚ್ಚಿಟ್ಟರು; ತಿರಿಗಿ ಬಂದು ಮತ್ತೊಂದು ಡೇರೆಯಲ್ಲಿ ಪ್ರವೇಶಿಸಿ ಅಲ್ಲಿಂದಲೂ ಹಾಗೆಯೇ ತೆಗೆದುಕೊಂಡು ಹೋಗಿ ಬಚ್ಚಿಟ್ಟರು.
7:9b.2KI.007.009 ಆಗ ಅವರು ಒಬ್ಬರಿಗೊಬ್ಬರು -- ನಾವು ಮಾಡಿದ್ದು ಒಳ್ಳೇದಲ್ಲ; ಈ ದಿವಸ ಒಳ್ಳೇ ಸಮಾಚಾರದ ದಿವಸ; ನಾವು ಸುಮ್ಮನೆ ಇದ್ದು ಉದಯವಾಗುವ ವರೆಗೆ ತಡೆದರೆ ಶಿಕ್ಷೆಯನ್ನು ಹೊಂದುವೆವು; ಆದಕಾರಣ ಬನ್ನಿರಿ ನಾವು ಹೋಗಿ ಅರಸನ ಮನೆಯವರಿಗೆ ತಿಳಿಸೋಣ ಎಂದು ಮಾತಾಡಿಕೊಂಡರು.
7:10b.2KI.007.010 ಹಾಗೆಯೇ ಅವರು ಬಂದು ಪಟ್ಟಣದ ಬಾಗಲು ಕಾಯುವವನನ್ನು ಕರೆದು ಅವನಿಗೆ -- ನಾವು ಅರಾಮ್ಯರ ಪಾಳೆಯಕ್ಕೆ ಹೋಗಿ ಬಂದೆವು; ಇಗೋ, ಅಲ್ಲಿ ಕಟ್ಟಲ್ಪಟ್ಟ ಕುದುರೆಗಳೂ ಕತ್ತೆಗಳೂ ನಿಶ್ಯಬ್ದವಾದ ಡೇರೆಗಳೂ ಹೊರತಾಗಿ ಮನು ಷ್ಯನಾದರೂ ಮನುಷ್ಯನ ಶಬ್ದವಾದರೂ ಅಲ್ಲಿ ಇಲ್ಲ ಅಂದರು.
7:11b.2KI.007.011 ಅವನು ಬಾಗಲು ಕಾಯುವವರನ್ನು ಕರೆದನು; ಅವರು ಒಳಗಿರುವ ಅರಸನ ಮನೆಯವರಿಗೆ ತಿಳಿಸಿದರು.
7:12b.2KI.007.012 ಆಗ ಅರಸನು ರಾತ್ರಿಯಲ್ಲಿ ಎದ್ದು ತನ್ನ ಸೇವಕರಿಗೆ--ಅರಾಮ್ಯರು ನಮಗೆ ಮಾಡಿದ್ದನ್ನು ನಿಮಗೆ ತಿಳಿಸುತ್ತೇನೆ. ನಾವು ಹಸಿದವರಾಗಿದ್ದೇವೆಂದು ಅವರು ತಿಳಿದು ಹೊಲದಲ್ಲಿ ಅಡಗಿಕೊಳ್ಳಲು ಪಾಳೆಯ ದಿಂದ ಹೊರಟು--ಅವರು ಪಟ್ಟಣದಿಂದ ಹೊರಟು ಬಂದಾಗ ನಾವು ಅವರನ್ನು ಸಜೀವಿಗಳನ್ನಾಗಿಯೇ ಹಿಡಿದು ಪಟ್ಟಣದಲ್ಲಿ ಪ್ರವೇಶಿಸುವೆವು ಅಂದುಕೊಂಡಿ ದ್ದಾರೆ ಅಂದನು.
7:13b.2KI.007.013 ಆಗ ಅವನ ಸೇವಕರಲ್ಲಿ ಒಬ್ಬನು --ಕುದುರೆಗಳಲ್ಲಿ ಐದು ಕುದುರೆಗಳನ್ನು ಕೆಲವರು ತಕ್ಕೊಂಡು ಹೋಗಲಿ; ಇಗೋ, ಅವು ಇಸ್ರಾಯೇಲಿನ ಎಲ್ಲಾ ಸಮೂಹದಲ್ಲಿ ಉಳಿದವುಗಳ ಹಾಗೆ ಅವೆ; ಅಂದರೆ ಇಗೋ, ಇಸ್ರಾಯೇಲಿನ ಎಲ್ಲಾ ಗುಂಪಿನಲ್ಲಿ ನಾಶವಾಗದೆ ಉಳಿದವುಗಳಂತಿವೆ; ನಾವು ಕಳುಹಿಸಿ ನೋಡೋಣ ಅಂದನು.
7:14b.2KI.007.014 ಹಾಗೆಯೇ ಅವರು ಎರಡು ರಥಗಳ ಕುದುರೆಗಳನ್ನು ತೆಗೆದುಕೊಂಡರು; ಆಗ ಅರಸನು--ನೀವು ಅರಾಮ್ಯರ ಪಾಳೆಯದ ಹಿಂದೆ ಹೋಗಿ ನೋಡಿರಿ ಎಂದು ಹೇಳಿ ಕಳುಹಿಸಿದನು.
7:15b.2KI.007.015 ಅವರು ಅವರ ಹಿಂದೆ ಯೊರ್ದನಿನ ವರೆಗೆ ಹೋದರು. ಇಗೋ, ಮಾರ್ಗದಲ್ಲೆಲ್ಲಾ ಅರಾಮ್ಯರು ಬಹು ಅವಸರದಿಂದ ಬಿಸಾಡಿದ ವಸ್ತ್ರಗಳೂ ಪಾತ್ರೆ ಗಳೂ ತುಂಬಿದ್ದನ್ನು ದೂತರು ತಿರಿಗಿ ಬಂದು ಅರಸ ನಿಗೆ ತಿಳಿಸಿದರು.
7:16b.2KI.007.016 ಆಗ ಜನರು ಹೊರಟುಹೋಗಿ ಅರಾಮ್ಯರ ಡೇರೆಗಳನ್ನು ಸುಲುಕೊಂಡರು. ಆದದ ರಿಂದ ಕರ್ತನ ವಾಕ್ಯದ ಪ್ರಕಾರವೇ ಒಂದು ಸೇರು ನಯವಾದ ಹಿಟ್ಟು ಒಂದು ಶೇಕೆಲಿಗೂ ಎರಡು ಸೇರು ಜವೆಗೋದಿಯು ಒಂದು ಶೇಕೆಲಿಗೂ ಮಾರಲ್ಪಟ್ಟಿತು.
7:17b.2KI.007.017 ಅರಸನಿಗೆ ಹಸ್ತಕನಾದ ಆ ಅಧಿಕಾರಿಯನ್ನು ಅರಸನು ಪಟ್ಟಣದ ಬಾಗಲಿನ ಕಾವಲಿಗೆ ನೇಮಿಸಿದ್ದನು. ಅರಸನು ದೇವರ ಮನುಷ್ಯನ ಬಳಿಗೆ ಬಂದಾಗ ದೇವರ ಮನು ಷ್ಯನು ಹೇಳಿದ್ದ ಪ್ರಕಾರವೇ ಜನರು ಅವನನ್ನು ಪಟ್ಟ ಣದ ಬಾಗಲಲ್ಲಿ ತುಳಿದು ಹಾಕಿದ್ದರಿಂದ ಅವನು ಸತ್ತುಹೋದನು.
7:18b.2KI.007.018 ಹಾಗೆಯೇ--ಎರಡು ಸೇರು ಜವೆ ಗೋದಿಯು ಒಂದು ಶೇಕೆಲಿಗೂ ಒಂದು ಸೇರು ನಯವಾದ ಹಿಟ್ಟು ಒಂದು ಶೇಕೆಲಿಗೂ ನಾಳೆ ಇಷ್ಟು ಹೊತ್ತಿಗೆ ಸಮಾರ್ಯದ ಬಾಗಲಲ್ಲಿ ಮಾರಲ್ಪಡುವ ವೆಂದು ದೇವರ ಮನುಷ್ಯನು ಅರಸನಿಗೆ ಹೇಳಿದ ಪ್ರಕಾರವೇ ಸಂಭವಿಸಿತು.
7:19b.2KI.007.019 ಆ ಅಧಿಕಾರಿ ದೇವರ ಮನುಷ್ಯನಿಗೆ ಪ್ರತ್ಯುತ್ತರವಾಗಿ--ಇಗೋ, ಕರ್ತನು ಆಕಾಶದಲ್ಲಿ ಕಿಟಕಿಗಳನ್ನು ಉಂಟುಮಾಡಿದರೂ ಹಾಗಾ ಗುವದೋ ಅಂದನು; ಅದಕ್ಕವನು--ಇಗೋ, ನೀನು ನಿನ್ನ ಕಣ್ಣುಗಳಿಂದ ನೋಡುವಿ; ಆದರೆ ಅದನ್ನು ತಿನ್ನು ವದಿಲ್ಲ ಎಂದು ಹೇಳಿದ್ದನು.ಆ ಪ್ರಕಾರವೇ ಅವನಿಗೆ ಸಂಭವಿಸಿತು; ಏನಂದರೆ ಬಾಗಲಲ್ಲಿ ಜನರು ಅವನನ್ನು ತುಳಿದಿದ್ದರಿಂದ ಅವನು ಸತ್ತನು.
7:20b.2KI.007.020 ಆ ಪ್ರಕಾರವೇ ಅವನಿಗೆ ಸಂಭವಿಸಿತು; ಏನಂದರೆ ಬಾಗಲಲ್ಲಿ ಜನರು ಅವನನ್ನು ತುಳಿದಿದ್ದರಿಂದ ಅವನು ಸತ್ತನು.
8
8:1b.2KI.008.001 ಎಲೀಷನು ತಾನು ಬದುಕಿಸಿದ ಮಗನ ತಾಯಿಯಾದವಳಿಗೆ -- ನೀನು ಎದ್ದು ನೀನೂ ನಿನ್ನ ಮನೆಯವರೂ ಎಲ್ಲಿ ಇಳುಕೊಳ್ಳುವದಕ್ಕೆ ಸ್ಥಳ ಉಂಟೋ ಅಲ್ಲಿ ಹೋಗಿ ಇಳುಕೊಂಡಿರು. ಯಾಕಂದರೆ ಕರ್ತನು ಬರವನ್ನು ಕಳುಹಿಸುವದಕ್ಕಿದ್ದಾನೆ. ಅದು ದೇಶದ ಮೇಲೆ ಏಳು ವರುಷದ ವರೆಗೂ ಇರುವದು ಎಂದು ಹೇಳಿದನು.
8:2b.2KI.008.002 ಆಗ ಆ ಸ್ತ್ರೀಯು ಎದ್ದು ದೇವರ ಮನುಷ್ಯನ ಮಾತಿನ ಪ್ರಕಾರವೇ ಮಾಡಿ ತನ್ನ ಮನೆಯವರ ಸಂಗಡ ಹೋಗಿ ಫಿಲಿಷ್ಟಿಯರ ದೇಶದಲ್ಲಿ ಏಳು ವರುಷ ವಾಸವಾಗಿದ್ದಳು.
8:3b.2KI.008.003 ಏಳು ವರುಷದ ತರುವಾಯ ಏನಾಯಿತಂದರೆ, ಆ ಸ್ತ್ರೀಯು ಫಿಲಿಷ್ಟಿಯರ ದೇಶವನ್ನು ಬಿಟ್ಟು ತಿರಿಗಿ ಬಂದು ತನ್ನ ಮನೆಗೋಸ್ಕರವೂ ಹೊಲಕ್ಕೋಸ್ಕರವೂ ಅರಸನಿಗೆ ಮೊರೆಯಿಟ್ಟಳು.
8:4b.2KI.008.004 ಅರಸನು ದೇವರ ಮನುಷ್ಯನ ಸೇವ ಕನಾದ ಗೇಹಜಿಯ ಸಂಗಡ ಮಾತನಾಡಿ--ಎಲೀ ಷನು ಮಾಡಿದ ಎಲ್ಲಾ ದೊಡ್ಡ ಕ್ರಿಯೆಗಳನ್ನು ನನಗೆ ವಿವರವಾಗಿ ತಿಳಿಸೆಂದು ಅವನಿಗೆ ಹೇಳಿದನು.
8:5b.2KI.008.005 ಅವನು ಸತ್ತವನನ್ನು ಬದುಕಿಸಿದನೆಂದು, ಗೇಹಜಿಯು ಅರಸ ನಿಗೆ ವಿವರವಾಗಿ ಹೇಳುತ್ತಿರುವಾಗ ಏನಾಯಿತಂದರೆ ಇಗೋ, ಬದುಕಿಸಿದ ಮಗನ ತಾಯಿಯಾದ ಆ ಸ್ತ್ರೀಯು ತನ್ನ ಮನೆಗೋಸ್ಕರವೂ ಹೊಲಕ್ಕೋಸ್ಕರವೂ ಅರಸನಿಗೆ ಮೊರೆಯಿಡುತ್ತಿದ್ದಳು. ಆಗ ಗೇಹಜಿಯುನನ್ನ ಒಡೆಯನೇ, ಅರಸನೇ, ಇವಳೇ ಆ ಸ್ತ್ರೀಯು, ಎಲೀಷನು ಬದುಕಿಸಿದ ಇವಳ ಮಗನು ಇವನೇ ಅಂದನು.
8:6b.2KI.008.006 ಅರಸನು ಆ ಸ್ತ್ರೀಯನ್ನು ಕೇಳಿದಾಗ ಅವಳು ವಿವರವಾಗಿ ಹೇಳಿದಳು. ಆಗ ಅರಸನು ಅವಳಿಗಾಗಿ ಒಬ್ಬ ಅಧಿಕಾರಿಯನ್ನು ಕಳುಹಿಸಿಕೊಟ್ಟು ಅವಳಿಗೆ ಉಂಟಾದದ್ದನ್ನೆಲ್ಲಾ ಅವಳು ದೇಶವನ್ನು ಬಿಟ್ಟ ದಿನ ಮೊದಲುಗೊಂಡು ಆ ಕಾಲದ ವರೆಗೂ ಆ ಹೊಲದ ಹುಟ್ಟುವಳಿಯೆಲ್ಲಾ ಅವಳಿಗೆ ಬರುವ ಹಾಗೆ ಮಾಡು ಅಂದನು.
8:7b.2KI.008.007 ಅರಾಮ್ಯರ ಅರಸನಾದ ಬೆನ್ಹದದನು ಅಸ್ವಸ್ಥನಾ ಗಿರುವಾಗ ಎಲೀಷನು ದಮಸ್ಕಕ್ಕೆ ಬಂದನು. ದೇವರ ಮನುಷ್ಯನು ಇಲ್ಲಿಗೆ ಬಂದಿದ್ದಾನೆಂದು ಅವನಿಗೆ ತಿಳಿಸ ಲ್ಪಟ್ಟಿತು.
8:8b.2KI.008.008 ಆಗ ಅರಸನು ಹಜಾಯೇಲನಿಗೆ--ನೀನು ಕೈಯಲ್ಲಿ ಕಾಣಿಕೆಯನ್ನು ತಕ್ಕೊಂಡು ಹೋಗಿ ದೇವರ ಮನುಷ್ಯನನ್ನು ಎದುರುಗೊಂಡು ಈ ವ್ಯಾಧಿಯಿಂದ ನಾನು ಗುಣವಾಗುವೆನೋ ಇಲ್ಲವೋ ಎಂದು ಅವ ನಿಂದ ಕರ್ತನನ್ನು ವಿಚಾರಿಸು ಅಂದನು.
8:9b.2KI.008.009 ಹಾಗೆಯೇ ಹಜಾಯೇಲನು ದಮಸ್ಕದಲ್ಲಿರುವ ಸಕಲ ಉತ್ತಮ ವಾದವುಗಳಲ್ಲಿ ನಾಲ್ವತ್ತು ಒಂಟೆಗಳು ಹೊರುವಷ್ಟನ್ನು ಕಾಣಿಕೆಯೊಂದಿಗೆ ಅವನನ್ನು ಎದುರುಗೊಳ್ಳಲು ಹೋಗಿ ಅವನ ಮುಂದೆ ಬಂದು ನಿಂತು--ಅರಾಮ್ಯರ ಅರಸನಾಗಿರುವ ನಿನ್ನ ಮಗನಾದ ಬೆನ್ಹದದನು--ಈ ವ್ಯಾಧಿಯಿಂದ ನಾನು ಬದುಕುವೆನೋ ಇಲ್ಲವೋ ಎಂದು ಕೇಳಲು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ ಅಂದನು.
8:10b.2KI.008.010 ಅದಕ್ಕೆ ಎಲೀಷನು--ಅವನಿಗೆ ನಿಜ ವಾಗಿಯೂ ಸ್ವಸ್ಥನಾಗುವಿ ಎಂದು ಹೋಗಿ ಹೇಳು; ಆದರೆ ಅವನು ನಿಜವಾಗಿ ಸಾಯುವನೆಂದು ಕರ್ತನು ನನಗೆ ತೋರಿಸಿದ್ದಾನೆ ಅಂದನು.
8:11b.2KI.008.011 ಆಗ ಇವನು ನಾಚಿಕೆಪಡುವ ವರೆಗೆ ದೇವರ ಮನುಷ್ಯನು ತನ್ನ ಮುಖವನ್ನು ಸ್ಥಿರಪಡಿಸಿ ಅತ್ತನು.
8:12b.2KI.008.012 ಆಗ ಹಜಾಯೇ ಲನು--ನನ್ನ ಒಡೆಯನು ಅಳುವದೇನು ಅಂದನು.ಅದಕ್ಕವನು -- ಇಸ್ರಾಯೇಲ್ ಮಕ್ಕಳಿಗೆ ನೀನು ಮಾಡಲು ಹೋಗುವ ಕೇಡು ನನಗೆ ತಿಳಿದದೆ; ನೀನು ಅವರ ಕೋಟೆಗಳಿಗೆ ಬೆಂಕಿ ಹೊತ್ತಿಸಿ ಅವರ ಯೌವನ ಸ್ಥರನ್ನು ಕತ್ತಿಯಿಂದ ಕೊಂದು ಅವರ ಕೂಸುಗಳನ್ನು ಅಪ್ಪಳಿಸಿ ಅವರ ಗರ್ಭಿಣೀ ಸ್ತ್ರೀಯರನ್ನು ಸೀಳಿಬಿಡುವಿ ಅಂದನು.
8:13b.2KI.008.013 ಹಜಾಯೇಲನು -- ಇಂಥಾ ಮಹಾ ಕೆಲಸವನ್ನು ಮಾಡುವದಕ್ಕೆ ನಿನ್ನ ಸೇವಕನು ನಾಯಿಯೋ ಏನು ಅಂದನು. ಎಲೀಷನು -- ನೀನು ಅರಾಮ್ಯರ ಮೇಲೆ ಅರಸನಾಗುವಿ ಎಂದು ಕರ್ತನು ನನಗೆ ತಿಳಿಸಿ ದ್ದಾನೆ ಅಂದನು.
8:14b.2KI.008.014 ಅವನು ಎಲೀಷನನ್ನು ಬಿಟ್ಟು ಹೊರಟು ತನ್ನ ಯಜಮಾನನ ಬಳಿಗೆ ಬಂದನು. ಇವನು ಅವನಿಗೆ--ಎಲೀಷನು ನಿನಗೆ ಏನು ಹೇಳಿದ ನೆಂದು ಕೇಳಿದ್ದಕ್ಕೆ ಅವನು--ನೀನು ನಿಜವಾಗಿ ಸ್ವಸ್ಥನಾ ಗುವಿ ಎಂದು ನನಗೆ ಹೇಳಿದನು ಅಂದನು. ಮಾರನೇ ದಿವಸದಲ್ಲಿ ಏನಾಯಿತಂದರೆ,
8:15b.2KI.008.015 ಅವನು ದಪ್ಪ ಬಟ್ಟೆ ಯನ್ನು ತಕ್ಕೊಂಡು ನೀರಿನಲ್ಲಿ ಅದ್ದಿ ಅವನ ಮುಖದ ಮೇಲೆ ಹಾಕಿದ್ದರಿಂದ ಅವನು ಸತ್ತನು. ಹೀಗೆ ಹಜಾ ಯೇಲನು ಅವನಿಗೆ ಬದಲಾಗಿ ಅರಸನಾದನು.
8:16b.2KI.008.016 ಇಸ್ರಾಯೇಲಿನ ಅರಸನಾಗಿರುವ ಅಹಾಬನ ಮಗನಾದ ಯೋರಾಮನ ಆಳ್ವಿಕೆಯ ಐದನೇ ವರುಷ ದಲ್ಲಿ ಯೆಹೂದದ ಅರಸನಾಗಿರುವ ಯೆಹೋಷಾಫಾ ಟನ ಮಗನಾದ ಯೆಹೋರಾಮನು ಆಳಲಾರಂಭಿಸಿ ದನು.
8:17b.2KI.008.017 ಅವನು ಆಳಲಾರಂಭಿಸಿದಾಗ ಮೂವತ್ತೆರಡು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರುಷ ಆಳಿದನು.
8:18b.2KI.008.018 ಅಹಾಬನ ಮನೆಯವರು ಮಾಡಿದ ಹಾಗೆ ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು; ಯಾಕಂದರೆ ಅಹಾಬನ ಮಗಳು ಅವನಿಗೆ ಹೆಂಡತಿಯಾಗಿದ್ದಳು.
8:19b.2KI.008.019 ಕರ್ತನು ದಾವೀದನಿಗೂ ಅವನ ಮಕ್ಕಳಿಗೂ ನಿರಂತರವಾಗಿ ದೀಪವನ್ನು ಕೊಡುವೆನೆಂದು ಅವನಿಗೆ ವಾಗ್ದಾನ ಮಾಡಿದ ಹಾಗೆ ತನ್ನ ಸೇವಕನಾದ ದಾವೀದನ ನಿಮಿತ್ತ ಯೆಹೂದವನ್ನು ಕೆಡಿಸಲು ಮನಸ್ಸಿಲ್ಲದೆ ಇದ್ದನು.
8:20b.2KI.008.020 ಅವನ ಕಾಲದಲ್ಲಿ ಯೆಹೂದದ ಕೈಕೆಳಗಿದ್ದ ಎದೋಮ್ಯರು ತಿರುಗಿ ಬಿದ್ದು ತಮಗೆ ಒಬ್ಬ ಅರಸ ನನ್ನು ಮಾಡಿಕೊಂಡರು.
8:21b.2KI.008.021 ಆದದರಿಂದ ಯೆಹೋ ರಾಮನು ತನ್ನ ಬಳಿಯಲ್ಲಿದ್ದ ಎಲ್ಲಾ ರಥಗಳನ್ನು ತಕ್ಕೊಂಡು ಚಾಯಾರಿಗೆ ಹೋಗಿ ರಾತ್ರಿಯಲ್ಲಿ ಎದ್ದು ತನ್ನನ್ನು ಸುತ್ತಿಕೊಂಡಿದ್ದ ಎದೋಮ್ಯರನ್ನೂ ರಥಗಳ ಯಜಮಾನರನ್ನೂ ಸಂಹರಿಸಿದನು.
8:22b.2KI.008.022 ಜನರು ತಮ್ಮ ಡೇರೆಗಳಿಗೆ ಓಡಿಹೋದರು. ಆದರೆ ಎದೋಮು ಯೆಹೂದದ ಕೈಕೆಳಗೆ ಇರದ ಹಾಗೆ ಅಂದಿನಿಂದ ಈ ವರೆಗೂ ತಿರುಗಿ ಬಿತ್ತು. ಆ ಕಾಲ ದಲ್ಲಿಯೇ ಲಿಬ್ನ ತಿರುಗಿ ಬಿತ್ತು.
8:23b.2KI.008.023 ಯೆಹೋರಾಮನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಯೆಹೂದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪ ಡಲಿಲ್ಲವೋ?
8:24b.2KI.008.024 ಯೆಹೋರಾಮನು ತನ್ನ ಪಿತೃಗಳ ಬಳಿಯಲ್ಲಿ ದಾವೀದನ ಪಟ್ಟಣದಲ್ಲಿ ಹೂಣಿಡಲ್ಪಟ್ಟನು; ಅವನ ಮಗನಾದ ಅಹಜ್ಯನು ಅವನಿಗೆ ಬದಲಾಗಿ ಅರಸನಾದನು.
8:25b.2KI.008.025 ಇಸ್ರಾಯೇಲಿನ ಅರಸನಾಗಿರುವ ಅಹಾಬನ ಮಗನಾದ ಯೋರಾಮನ ಹನ್ನೆರಡನೇ ವರುಷದಲ್ಲಿ ಯೆಹೂದದ ಅರಸನಾಗಿರುವ ಯೆಹೋರಾಮನ ಮಗನಾದ ಅಹಜ್ಯನು ಆಳಲಾರಂಭಿಸಿದನು.
8:26b.2KI.008.026 ಅಹ ಜ್ಯನು ಆಳಲು ಆರಂಭಿಸಿದಾಗ ಇಪ್ಪತ್ತೆರಡು ವರುಷ ದವನಾಗಿದ್ದು ಯೆರೂಸಲೇಮಿನಲ್ಲಿ ಒಂದು ವರುಷ ಆಳಿದನು. ಅವನ ತಾಯಿ ಅತಲ್ಯಳು; ಅವಳು ಇಸ್ರಾ ಯೇಲಿನ ಅರಸನಾದ ಒಮ್ರಿಯ ಮಗಳು.
8:27b.2KI.008.027 ಅವನು ಅಹಾಬನ ಮನೆಯ ಮಾರ್ಗದಲ್ಲಿ ನಡೆದು ಅಹಾಬನ ಮನೆಯವರ ಹಾಗೆ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಯಾಕಂದರೆ ಅವನು ಅಹಾಬನ ಅಳಿಯನಾಗಿದ್ದನು.
8:28b.2KI.008.028 ಅವನು ಅಹಾಬನ ಮಗನಾದ ಯೋರಾಮನ ಸಂಗಡ ಗಿಲ್ಯಾದಿನಲ್ಲಿರುವ ರಾಮೋ ತಿಗೆ ಅರಾಮ್ಯರ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಲು ಹೋದನು. ಆದರೆ ಅರಾಮ್ಯರು ಯೋರಾಮನನ್ನು ಹೊಡೆದರು.ಅರಸನಾದ ಯೋರಾಮನು ಅರಾಮ್ಯರ ದೇಶದ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಿದಾಗ ರಾಮೋ ತಿನಲ್ಲಿ ಅರಾಮ್ಯರು ತನ್ನನ್ನು ಹೊಡೆದ ಗಾಯಗಳನ್ನು ಗುಣಮಾಡಿಕೊಳ್ಳುವದಕ್ಕೆ ಇಜ್ರೇಲಿಗೆ ತಿರುಗಿ ಹೋದನು. ಆಗ ಅಹಾಬನ ಮಗನಾದ ಯೋರಾ ಮನು ಇಜ್ರೇಲಿನಲ್ಲಿ ಅಸ್ವಸ್ಥನಾಗಿರುವದರಿಂದ ಯೆಹೂದದ ಅರಸನಾಗಿರುವ ಯೆಹೋರಾಮನ ಮಗನಾದ ಅಹಜ್ಯನು ಅವನನ್ನು ನೋಡಲು ಅಲ್ಲಿಗೆ ಹೋದನು.
8:29b.2KI.008.029 ಅರಸನಾದ ಯೋರಾಮನು ಅರಾಮ್ಯರ ದೇಶದ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಿದಾಗ ರಾಮೋ ತಿನಲ್ಲಿ ಅರಾಮ್ಯರು ತನ್ನನ್ನು ಹೊಡೆದ ಗಾಯಗಳನ್ನು ಗುಣಮಾಡಿಕೊಳ್ಳುವದಕ್ಕೆ ಇಜ್ರೇಲಿಗೆ ತಿರುಗಿ ಹೋದನು. ಆಗ ಅಹಾಬನ ಮಗನಾದ ಯೋರಾ ಮನು ಇಜ್ರೇಲಿನಲ್ಲಿ ಅಸ್ವಸ್ಥನಾಗಿರುವದರಿಂದ ಯೆಹೂದದ ಅರಸನಾಗಿರುವ ಯೆಹೋರಾಮನ ಮಗನಾದ ಅಹಜ್ಯನು ಅವನನ್ನು ನೋಡಲು ಅಲ್ಲಿಗೆ ಹೋದನು.
9
9:1b.2KI.009.001 ಪ್ರವಾದಿಯಾದ ಎಲೀಷನು ಪ್ರವಾದಿಗಳ ಮಕ್ಕಳಲ್ಲಿ ಒಬ್ಬನನ್ನು ಕರೆದು ಅವನಿಗೆ--ನಡುವನ್ನು ಕಟ್ಟಿಕೊಂಡು ಈ ಎಣ್ಣೆಯ ಪಾತ್ರೆಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಗಿಲ್ಯಾದಿನಲ್ಲಿರುವ ರಾಮೋತಿಗೆ ಹೋಗು.
9:2b.2KI.009.002 ನೀನು ಅಲ್ಲಿಗೆ ಸೇರಿದಾಗ ನಿಂಷಿಯ ಮಗನಾಗಿರುವ ಯೆಹೋಷಾಫಾಟನ ಮಗ ನಾದ ಯೇಹುವನ್ನು ಅಲ್ಲಿ ನೋಡಿ ಒಳಗೆ ಹೋಗಿ ಅವನನ್ನು ತನ್ನ ಸಹೋದರರ ಮಧ್ಯದಿಂದ ಏಳ ಮಾಡಿ ಒಳಗಿನ ಕೊಠಡಿಗೆ ಕರಕೊಂಡು ಹೋಗಿ ಎಣ್ಣೆಯ ಪಾತ್ರೆಯನ್ನು ತಕ್ಕೊಂಡು ಅವನ ತಲೆಯ ಮೇಲೆ ಹೊಯ್ದು
9:3b.2KI.009.003 ಅವನಿಗೆ--ಇಸ್ರಾಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿಸಿದ್ದೇನೆ ಎಂದು ಕರ್ತನು ಹೇಳುತ್ತಾನೆಂಬದಾಗಿ ಹೇಳಿ ಕದವನ್ನು ತೆರೆದು ತಡಮಾಡದೆ ಓಡಿಹೋಗು ಅಂದನು.
9:4b.2KI.009.004 ಹಾಗೆಯೇ ಆ ಯೌವನಸ್ಥನು ಅಂದರೆ ಪ್ರವಾದಿ ಯಾದ ಆ ಯೌವನಸ್ಥನು ಗಿಲ್ಯಾದಿನಲ್ಲಿರುವ ರಾಮೋತಿಗೆ ಹೋದನು.
9:5b.2KI.009.005 ಅವನು ಅಲ್ಲಿ ಸೇರಿದಾಗ ಇಗೋ, ಸೈನ್ಯಾಧಿಪತಿಗಳು ಕುಳಿತುಕೊಂಡಿದ್ದರು. ಆಗ ಅವನು -- ಅಧಿಪತಿಯೇ, ನಿನಗೆ ಹೇಳಬೇಕಾದ ಮಾತು ನನಗೆ ಉಂಟು ಅಂದನು. ಯೇಹುವು ಅವ ನಿಗೆ--ನಮ್ಮೆಲ್ಲರಲ್ಲಿ ಯಾರಿಗೆ ಅಂದನು. ಅವನುಅಧಿಪತಿಯೇ, ನಿನಗೆ ಅಂದನು.
9:6b.2KI.009.006 ಅವನು ಎದ್ದು ಮನೆಯೊಳಕ್ಕೆ ಹೋದನು. ಆಗ ಇವನು ಎಣ್ಣೆ ಯನ್ನು ಅವನ ತಲೆಯ ಮೇಲೆ ಹೊಯ್ದು ಅವನಿಗೆ ಹೇಳಿದ್ದು--ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ, ಕರ್ತನ ಜನರಾದ ಇಸ್ರಾ ಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇ ಕಿಸಿದ್ದೇನೆ.
9:7b.2KI.009.007 ಪ್ರವಾದಿಗಳಾದ ನನ್ನ ಸೇವಕರ ರಕ್ತ ಕ್ಕೋಸ್ಕರವೂ ಕರ್ತನ ಎಲ್ಲಾ ಸೇವಕರ ರಕ್ತಕ್ಕೋಸ್ಕ ರವೂ ಈಜೆಬೆಲಳಿಗೆ ಮುಯ್ಯಿಗೆ ಮುಯ್ಯಿ ತೀರಿ ಸುವ ಹಾಗೆಯೂ ನೀನು ನಿನ್ನ ಯಜಮಾನ ನಾದ ಅಹಾಬನ ಮನೆಯವರನ್ನು ಸಂಹರಿಸಬೇಕು.
9:8b.2KI.009.008 ಅಹಾಬನ ಮನೆಯೆಲ್ಲಾ ನಾಶವಾಗಿ ಹೋಗುವದು. ಅಹಾಬನ ಸಂತಾನದ ಗಂಡಸರನ್ನೂ ಇಸ್ರಾಯೇಲಿ ನಲ್ಲಿ ಉಳಿದು ಬಚ್ಚಿಡಲ್ಪಟ್ಟವನನ್ನೂ ನಾನು ಕಡಿದು ಬಿಡುವೆನು.
9:9b.2KI.009.009 ಅಹಾಬನ ಮನೆಯನ್ನು ನೆಬಾಟನ ಮಗನಾದ ಯಾರೊಬ್ಬಾಮನ ಮನೆಯ ಹಾಗೆಯೂ ಅಹೀಯನ ಮಗನಾದ ಬಾಷನ ಮನೆಯ ಹಾಗೆಯೂ ಮಾಡುವೆನು.
9:10b.2KI.009.010 ಇದಲ್ಲದೆ ಇಜ್ರೇಲಿನ ಪಾಲಿನಲ್ಲಿ ನಾಯಿಗಳು ಈಜೆಬೆಲಳನ್ನು ತಿನ್ನುವವು; ಅವಳನ್ನು ಹೂಣಿಡಲು ಯಾವನೂ ಇರುವದಿಲ್ಲ ಎಂದು ಹೇಳಿ ಬಾಗಲನ್ನು ತೆರೆದು ಓಡಿಹೋದನು.
9:11b.2KI.009.011 ಆಗ ಯೇಹುವು ತನ್ನ ಯಜಮಾನನ ಸೇವಕರ ಬಳಿಗೆ ಹೊರಟು ಬಂದನು. ಅವರು ಅವನಿಗೆ ಎಲ್ಲವೂ ಕ್ಷೇಮವೋ? ಈ ಹುಚ್ಚನು ನಿನ್ನ ಬಳಿಗೆ ಬಂದದ್ದೇನು ಅಂದರು. ಅವನು ಅವರಿಗೆ--ಆ ಮನುಷ್ಯನನ್ನೂ ಅವನ ಮಾತನ್ನೂ ನೀವು ಬಲ್ಲಿರಿ ಅಂದನು.
9:12b.2KI.009.012 ಅದಕ್ಕವರು--ಅದು ಸುಳ್ಳು, ದಯಮಾಡಿ ನಮಗೆ ತಿಳಿಸು ಅಂದರು. ಆದದರಿಂದ ಅವನು--ಇಸ್ರಾ ಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿ ಸಿದ್ದೇನೆಂಬದಾಗಿ ಕರ್ತನು ಹೇಳುತ್ತಾನೆಂದು ಹೀಗೆ ನನಗೆ ಹೇಳಿದನು ಅಂದನು.
9:13b.2KI.009.013 ಆಗ ಅವರು ತ್ವರೆ ಪಟ್ಟು ಪ್ರತಿಯೊಬ್ಬನು ತನ್ನ ವಸ್ತ್ರವನ್ನು ತೆಗೆದು ಮೆಟ್ಟಲುಗಳ ಮೇಲೆ ಹಾಸಿ ಇವನನ್ನು ಕುಳ್ಳಿರಿಸಿ ತುತೂರಿಗಳನ್ನು ಊದಿ -- ಯೇಹುವು ಅರಸನಾಗಿ ದ್ದಾನೆಂದು ಹೇಳಿದರು.
9:14b.2KI.009.014 ಹೀಗೆ ನಿಂಷಿಯ ಮಗನಾಗಿ ರುವ ಯೆಹೋಷಾಫಾಟನ ಮಗನಾದ ಯೇಹುವು ಯೆಹೋರಾಮನಿಗೆ ವಿರೋಧವಾಗಿ ಒಳಸಂಚು ಮಾಡಿ ದನು. ಅರಾಮ್ಯರ ಅರಸನಾದ ಹಜಾಯೇಲನ ನಿಮಿತ್ತ ಯೆಹೋರಾಮನೂ ಎಲ್ಲಾ ಇಸ್ರಾಯೇಲ್ಯರೂ ಗಿಲ್ಯಾ ದಿನ ರಾಮೋತಿನಲ್ಲಿ ಕಾಯುತ್ತಾ ಇದ್ದರು.
9:15b.2KI.009.015 ಆದರೆ ಅರಸನಾದ ಯೋರಾಮನು ಅರಾಮ್ಯರ ಅರಸನಾದ ಹಜಾಯೇಲನ ಸಂಗಡ ಯುದ್ಧಮಾಡುವಾಗ ಅರಾ ಮ್ಯರು ತನ್ನನ್ನು ಹೊಡೆದ ಗಾಯಗಳನ್ನು ಸ್ವಸ್ಥಮಾಡಿ ಕೊಳ್ಳುವ ನಿಮಿತ್ತ ಇಜ್ರೇಲಿಗೆ ಹೋಗಿದ್ದನು.
9:16b.2KI.009.016 ಆಗ ಯೇಹುವು -- ನಿಮಗೆ ಮನಸ್ಸಾದರೆ ಹೋಗಿ ಇದನ್ನು ಇಜ್ರೇಲಿನಲ್ಲಿ ತಿಳಿಸಲು ಪಟ್ಟಣ ದಿಂದ ಯಾರೂ ತಪ್ಪಿಸಿಕೊಂಡು ಹೊರಡದೆ ಇರಲಿ ಅಂದನು. ಯೇಹುವು ರಥದ ಮೇಲೆ ಏರಿ ಇಜ್ರೇಲಿಗೆ ಹೋದನು. ಯಾಕಂದರೆ ಯೋರಾಮನು ಅಲ್ಲಿ ಬಿದ್ದಿದ್ದನು. ಇದಲ್ಲದೆ ಯೋರಾಮನನ್ನು ನೋಡು ವದಕ್ಕೆ ಯೆಹೂದದ ಅರಸನಾದ ಅಹಜ್ಯನು ಅಲ್ಲಿಗೆ ಬಂದಿದ್ದನು.
9:17b.2KI.009.017 ಇಜ್ರೇಲಿನ ಬುರುಜಿನ ಮೇಲೆ ಕಾವಲು ಗಾರನು ನಿಂತಿದ್ದನು. ಇವನು ಬರುವ ಯೇಹುವಿನ ಗುಂಪನ್ನು ಕಂಡು--ನಾನು ಗುಂಪನ್ನು ನೋಡುತ್ತೇನೆ ಅಂದನು. ಅದಕ್ಕೆ ಯೋರಾಮನು ರಾಹುತನನ್ನು ಕರೆದು ಅವರಿಗೆ ಎದುರಾಗಿ ಕಳುಹಿಸಿ--ಸಮಾಧಾ ನವೋ ಎಂದು ಕೇಳಲಿ ಅಂದನು.
9:18b.2KI.009.018 ಆದದರಿಂದ ಒಬ್ಬನು ಕುದುರೆಯನ್ನು ಹತ್ತಿ ಅವನಿಗೆ ಎದುರಾಗಿ ಹೋಗಿ--ಸಮಾಧಾನವೋ ಎಂದು ಅರಸನು ಕೇಳು ತ್ತಾನೆ ಅಂದನು. ಅದಕ್ಕೆ ಯೇಹುವು--ಸಮಾಧಾನ ನಿನಗೆ ಏನು? ನನ್ನ ಹಿಂದಕ್ಕೆ ಹೋಗು ಅಂದನು. ಆಗ ಕಾವಲುಗಾರನು -- ಸೇವಕನು ಅವರ ಬಳಿಗೆ ಹೋಗಿ ತಿರಿಗಿ ಬರಲಿಲ್ಲ ಅಂದನು.
9:19b.2KI.009.019 ಆಗ ಬೇರೆ ರಾಹುತನನ್ನು ಕಳುಹಿಸಿದನು. ಇವನು ಅವರ ಬಳಿಗೆ ಹೋಗಿ--ಸಮಾಧಾನವೋ ಎಂದು ಅರಸನು ಕೇಳು ತ್ತಾನೆ ಅಂದನು. ಅದಕ್ಕೆ ಯೇಹುವು--ಸಮಾಧಾನ ನಿನಗೆ ಏನು--ನನ್ನ ಹಿಂದಕ್ಕೆ ಹೋಗು ಅಂದನು.
9:20b.2KI.009.020 ಆಗ ಕಾವಲುಗಾರನು--ಇವನೂ ಅವರ ಬಳಿಗೆ ಹೋಗಿ ತಿರಿಗಿ ಬರಲಿಲ್ಲ. ಇದಲ್ಲದೆ ಓಡಿಸುವದು ನಿಂಷಿಯ ಮಗನಾದ ಯೇಹುವು ಓಡಿಸುವ ಹಾಗಿದೆ; ಯಾಕಂದರೆ ಅವನು ಹುಚ್ಚುತನವಾಗಿ ಓಡಿಸುತ್ತಾನೆ ಅಂದನು.
9:21b.2KI.009.021 ಯೋರಾಮನು ರಥಹೂಡಬೇಕೆಂದು ಹೇಳಿದನು. ಅವನ ರಥವು ಸಿದ್ಧವಾಯಿತು. ಆಗ ಇಸ್ರಾಯೇಲಿನ ಅರಸನಾದ ಯೋರಾಮನೂ ಯೆಹೂ ದದ ಅರಸನಾದ ಅಹಜ್ಯನೂ ಹೊರಟು ಅವನವನು ತನ್ನ ತನ್ನ ರಥದಲ್ಲಿ ಏರಿ ಯೇಹುವಿಗೆ ಎದುರಾಗಿ ಹೊರಟು ಇಜ್ರೇಲ್ಯನಾದ ನಾಬೋತನ ಹೊಲದಲ್ಲಿ ಅವನನ್ನು ಸಂಧಿಸಿದರು.
9:22b.2KI.009.022 ಯೋರಾಮನು ಯೇಹು ವನ್ನು ನೋಡಿದಾಗ--ಯೇಹುವೇ, ಸಮಾಧಾನವೋ ಅಂದನು. ಅದಕ್ಕವನು--ನಿನ್ನ ತಾಯಿಯಾದ ಈಜೆ ಬೆಲಳ ಜಾರತ್ವವೂ ಅವಳ ಮಾಟಗಳೂ ಅಧಿಕವಾಗಿರು ವಾಗ ಸಮಾಧಾನವೇನು ಅಂದನು.
9:23b.2KI.009.023 ಆಗ ಯೋರಾ ಮನು ಅಹಜ್ಯನಿಗೆ--ಅಹಜ್ಯನೇ, ದ್ರೋಹ ಎಂದು ಹೇಳಿ ತನ್ನ ಕೈ ತಿರುಗಿಸಿಕೊಂಡು ಓಡಿಹೋದನು.
9:24b.2KI.009.024 ಆದರೆ ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬೊಗ್ಗಿಸಿ ತನ್ನ ಕೈಯಿಂದ ಯೋರಾಮನನ್ನು ಅವನ ತೋಳುಗಳ ನಡುವೆ ಹೊಡೆದನು. ಬಾಣ ಹೃದಯದಲ್ಲಿ ತೂರಿ ಹೊರಟಿತು; ಅವನು ರಥದಲ್ಲಿ ಕೆಳಗೆ ಮುದುರಿ ಕೊಂಡು ಬಿದ್ದನು.
9:25b.2KI.009.025 ಆಗ ಯೇಹುವು ತನ್ನ ಅಧಿಪತಿ ಯಾದ ಬಿದ್ಕರನಿಗೆ--ನೀನು ಅವನನ್ನು ತೆಗೆದುಕೊಂಡು ಹೋಗಿ ಇಜ್ರೇಲ್ಯನಾದ ನಾಬೋತನ ಪಾಲಾಗಿರುವ ಹೊಲದಲ್ಲಿ ಹಾಕಿಬಿಡು.
9:26b.2KI.009.026 ನಾನೂ ನೀನೂ ಅವನ ತಂದೆಯಾದ ಅಹಾಬನ ಹಿಂದೆ ಕುದುರೆ ಏರಿಕೊಂಡು ಹೋಗುತ್ತಿರುವಾಗ ಕರ್ತನು ಈ ಭಾರವನ್ನು ಅವನ ಮೇಲೆ ಹೊರಿಸಿದನೆಂದು ಜ್ಞಾಪಕಮಾಡಿಕೋ. ಏನಂದರೆ--ನಾಬೋತನ ರಕ್ತವನ್ನೂ ಅವನ ಕುಮಾರರ ರಕ್ತವನ್ನೂ ನಿನ್ನೆ ನಾನು ನಿಶ್ಚಯವಾಗಿ ನೋಡಿದೆನಲ್ಲಾ ಎಂದು ಕರ್ತನು ಹೇಳುತ್ತಾನೆ. ಇದಲ್ಲದೆ--ಇದೇ ಹೊಲದಲ್ಲಿ ನಿನಗೆ ಮುಯ್ಯಿಗೆ ಮುಯ್ಯಿ ಕೊಡುವೆ ನೆಂದು ಕರ್ತನು ಹೇಳುತ್ತಾನೆ. ಆದದರಿಂದ ಕರ್ತನ ವಾಕ್ಯದ ಪ್ರಕಾರ ಅವನನ್ನು ಎತ್ತಿಕೊಂಡು ಆ ಹೊಲ ದಲ್ಲಿ ಹಾಕಿಬಿಡು ಅಂದನು.
9:27b.2KI.009.027 ಯೆಹೂದದ ಅರಸ ನಾದ ಅಹಜ್ಯನು ಇದನ್ನು ನೋಡಿದಾಗ ಅವನು ತೋಟದ ಮನೆಯ ಮಾರ್ಗವಾಗಿ ಓಡಿಹೋದನು. ಯೇಹುವು ಅವನ ಹಿಂದೆ ಹೋಗಿ--ರಥದಲ್ಲಿ ಅವ ನನ್ನು ಸಹ ಸಂಹರಿಸಿರಿ ಅಂದನು. ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಎಂಬ ಸ್ಥಳಕ್ಕೆ ಏರಿ ಹೋಗುವ ಮಾರ್ಗದಲ್ಲಿ ಹೊಡೆದರು. ಅವನು ಮೆಗಿದ್ದೋನಿಗೆ ಓಡಿಹೋಗಿ ಅಲ್ಲಿ ಸತ್ತುಹೋದನು.
9:28b.2KI.009.028 ಅವನ ಸೇವ ಕರು ಅವನನ್ನು ರಥದಲ್ಲಿ ಯೆರೂಸಲೇಮಿಗೆ ತಕ್ಕೊಂಡು ಹೋಗಿ ದಾವೀದನ ಪಟ್ಟಣದೊಳಗೆ ಅವನ ಪಿತೃಗಳ ಬಳಿಯಲ್ಲಿ ಅವನ ಸಮಾಧಿಯಲ್ಲಿ ಅವನನ್ನು ಹೂಣಿ ಟ್ಟರು.
9:29b.2KI.009.029 ಅಹಾಬನ ಮಗನಾದ ಯೋರಾಮನ ಆಳ್ವಿಕೆಯ ಹನ್ನೊಂದನೇ ವರುಷದಲ್ಲಿ ಅಹಜ್ಯನು ಯೆಹೂದದ ಮೇಲೆ ಆಳಲು ಪ್ರಾರಂಭಿಸಿದನು.
9:30b.2KI.009.030 ಯೇಹುವು ಇಜ್ರೇಲಿಗೆ ಬಂದಿದ್ದಾನೆಂದು ಈಜೆ ಬೆಲಳು ಕೇಳಿ ಅವಳು ತನ್ನ ಮುಖಕ್ಕೆ ಬಣ್ಣ ಹಚ್ಚಿ ಕೊಂಡು ತನ್ನ ತಲೆಯನ್ನು ಶೃಂಗರಿಸಿಕೊಂಡು ಕಿಟಕಿ ಯಿಂದ ಇಣಿಕಿ ನೋಡಿದಳು.
9:31b.2KI.009.031 ಯೇಹುವು ಬಾಗ ಲಲ್ಲಿ ಪ್ರವೇಶಿಸಿದಾಗ ಅವಳು ತನ್ನ ಯಜಮಾನನನ್ನು ಕೊಂದ ಜಿಮ್ರಿಗೆ ಸಮಾಧಾನವಿತ್ತೋ ಅಂದಳು.
9:32b.2KI.009.032 ಅವನು ತನ್ನ ಮುಖವನ್ನು ಆ ಕಿಟಕಿಯ ಕಡೆಗೆ ಎತ್ತಿ--ನನ್ನ ಕಡೆ ಇರುವವರು ಯಾರು ಅಂದನು. ಆಗ ಇಬ್ಬರು ಮೂವರು ಕಂಚುಕಿಗಳು ಆ ಕಿಟಕಿ ಯಲ್ಲಿಂದ ಅವನನ್ನು ನೋಡಿದರು.
9:33b.2KI.009.033 ಅವನು-- ಅವಳನ್ನು ಕೆಳಕ್ಕೆ ತಳ್ಳಿಬಿಡಿರಿ ಅಂದನು. ಅವರು ಅವ ಳನ್ನು ಕೆಳಕ್ಕೆ ತಳ್ಳಿಬಿಟ್ಟದ್ದರಿಂದ ಅವಳ ರಕ್ತವು ಗೋಡೆಯ ಮೇಲೆಯೂ ಕುದುರೆಗಳ ಮೇಲೆಯೂ ಚೆಲ್ಲಲ್ಪಟ್ಟಿತು. ಅವನು ಅವಳನ್ನು ತುಳಿಸಿದನು.
9:34b.2KI.009.034 ಅವನು ಒಳಗೆ ಹೋಗಿ ತಿಂದು ಕುಡಿದ ಮೇಲೆ ಅವರಿಗೆ -- ನೀವು ಹೋಗಿ ಆ ಶಪಿಸಲ್ಪಟ್ಟವಳನ್ನು ನೋಡಿಕೊಂಡು ಹೂಣಿಡಿರಿ; ಅವಳು ಅರಸನ ಮಗಳು ಅಂದನು.
9:35b.2KI.009.035 ಅವರು ಅವಳನ್ನು ಹೂಣಿಡಲು ಹೋದಾಗ ಅವಳ ತಲೆ ಬುರುಡೆಯೂ ಕಾಲುಗಳೂ ಅಂಗೈಗಳೂ ಹೊರತು ಮತ್ತೇನೂ ಕಾಣಲಿಲ್ಲ. ಅವರು ತಿರಿಗಿ ಬಂದು ಅವನಿಗೆ ತಿಳಿಸಿದರು.
9:36b.2KI.009.036 ಅದಕ್ಕವನುಕರ್ತನು ತನ್ನ ಸೇವಕನಾಗಿರುವ ತಿಷ್ಬೀಯನಾದ ಎಲೀ ಯನ ಮುಖಾಂತರ ಹೇಳಿದ ವಾಕ್ಯವು ಇದೇ--ಇಜ್ರೇಲಿನ ಹೊಲದಲ್ಲಿ ನಾಯಿಗಳು ಈಜೆಬೆಲಳ ಮಾಂಸವನ್ನು ತಿನ್ನುವವು.ಇದಲ್ಲದೆ ಇದೇ ಈಜೆ ಬೆಲಳೆಂದು ಹೇಳಕೂಡದ ಹಾಗೆ ಇಜ್ರೇಲಿನ ಪಾಲಿನ ಹೊಲದ ಮೇಲ್ಭಾಗದಲ್ಲಿ ಈಜೆಬೆಲಳ ಹೆಣ ಗೊಬ್ಬರದ ಹಾಗೆ ಇರುವದು ಎಂಬದೇ.
9:37b.2KI.009.037 ಇದಲ್ಲದೆ ಇದೇ ಈಜೆ ಬೆಲಳೆಂದು ಹೇಳಕೂಡದ ಹಾಗೆ ಇಜ್ರೇಲಿನ ಪಾಲಿನ ಹೊಲದ ಮೇಲ್ಭಾಗದಲ್ಲಿ ಈಜೆಬೆಲಳ ಹೆಣ ಗೊಬ್ಬರದ ಹಾಗೆ ಇರುವದು ಎಂಬದೇ.
10
10:1b.2KI.010.001 ಸಮಾರ್ಯದಲ್ಲಿ ಅಹಾಬನಿಗೆ ಎಪ್ಪತ್ತು ಮಂದಿ ಮಕ್ಕಳು ಇದ್ದದರಿಂದ ಯೇಹುವು ಸಮಾರ್ಯದಲ್ಲಿರುವ ಇಜ್ರೇಲಿನ ಪ್ರಧಾನರಿಗೂ ಹಿರಿ ಯರಿಗೂ ಅಹಾಬನ ಮಕ್ಕಳನ್ನು ಪಾಲಿಸುವವರಿಗೂ ಪತ್ರಗಳನ್ನು ಬರೆದು ಸಮಾರ್ಯಕ್ಕೆ ಕಳುಹಿಸಿ--
10:2b.2KI.010.002 ನಿಮ್ಮ ಯಜಮಾನನ ಕುಮಾರರು ನಿಮ್ಮ ಬಳಿಯಲ್ಲಿ ಇದ್ದಾರೆ; ಇದಲ್ಲದೆ ರಥಗಳೂ ಕುದುರೆಗಳೂ ಕೋಟೆಯೂ ಆಯುಧಗಳೂ ನಿಮಗೆ ಉಂಟು. ಆದದರಿಂದ ಈ ಪತ್ರವು ನಿಮ್ಮ ಬಳಿಗೆ ಬಂದಾಗ
10:3b.2KI.010.003 ನೀವು ನಿಮ್ಮ ಯಜ ಮಾನನ ಕುಮಾರರಲ್ಲಿ ಉತ್ತಮನಾಗಿರುವ ಮತ್ತು ಸಮರ್ಥನಾಗಿರುವವನನ್ನು ನೋಡಿಕೊಂಡು ಅವ ನನ್ನು ಅವನ ತಂದೆಯ ಸಿಂಹಾಸನದ ಮೇಲೆ ಕೂಡ್ರಿಸಿ ನಿಮ್ಮ ಯಜಮಾನನ ಮನೆಯವರಿಗೋಸ್ಕರ ಯುದ್ಧ ಮಾಡಿರಿ ಎಂದು ತಿಳಿಸಿದನು.
10:4b.2KI.010.004 ಆದರೆ ಅವರು ಬಹಳವಾಗಿ ಭಯಪಟ್ಟು--ಇಗೋ, ಇಬ್ಬರು ಅರಸು ಗಳು ಅವನ ಮುಂದೆ ನಿಲ್ಲಲಾರದೆ ಹೋದರು; ನಾವು ನಿಲ್ಲುವದು ಹೇಗೆ ಅಂದರು.
10:5b.2KI.010.005 ಆಗ ಮನೆಯ ಮೇಲೆ ಇರುವವನೂ ಪಟ್ಟಣದ ಮೇಲೆ ಇರುವವನೂ ಹಿರಿಯರೂ ಮಕ್ಕಳನ್ನು ಪೋಷಿಸುವವರೂ ಯೇಹು ವಿಗೆ--ನಾವು ನಿನ್ನ ಸೇವಕರು; ನೀನು ನಮಗೆ ಹೇಳುವ ದನ್ನೆಲ್ಲಾ ಮಾಡುತ್ತೇವೆ; ನಾವು ಯಾವನನ್ನಾದರೂ ಅರಸನಾಗಲು ಮಾಡುವದಿಲ್ಲ; ನಿನ್ನ ದೃಷ್ಟಿಗೆ ಒಳ್ಳೇದಾಗಿ ರುವದನ್ನು ಮಾಡು ಎಂದು ಹೇಳಿ ಕಳುಹಿಸಿದರು.
10:6b.2KI.010.006 ಆಗ ಅವನು ಅವರಿಗೆ ಎರಡನೇ ಸಾರಿ ಪತ್ರವನ್ನು ಬರೆದು--ನೀವು ನನ್ನವರಾಗಿದ್ದು ನನ್ನ ಮಾತು ಕೇಳುವ ವರಾಗಿದ್ದರೆ ನಿಮ್ಮ ಯಜಮಾನನ ಮಕ್ಕಳಾಗಿರುವ ಮನು ಷ್ಯರ ತಲೆಗಳನ್ನು ತಕ್ಕೊಂಡು ನಾಳೆ ಇಷ್ಟು ಹೊತ್ತಿಗೆ ಇಜ್ರೇಲಿಗೆ ನನ್ನ ಬಳಿಗೆ ಬನ್ನಿರಿ ಎಂದು ಹೇಳಿದನು. ಅರಸನ ಮಕ್ಕಳಾದ ಎಪ್ಪತ್ತು ಮಂದಿ ಮಕ್ಕಳು ತಮ್ಮನ್ನು ಪೋಷಿಸುವ ಪಟ್ಟಣದ ಪ್ರಮುಖರ ಬಳಿಯಲ್ಲಿ ಇದ್ದರು.
10:7b.2KI.010.007 ಈ ಪತ್ರವು ಅವರ ಬಳಿಗೆ ಬಂದಾಗ ಏನಾಯಿತಂದರೆ, ಅವರು ಅರಸನ ಮಕ್ಕಳನ್ನು ಹಿಡಿದು ಎಪ್ಪತ್ತು ಮಂದಿಯನ್ನು ಕೊಂದು ಅವರ ತಲೆಗಳನ್ನು ಪುಟ್ಟಿಗಳಲ್ಲಿಟ್ಟು ಇಜ್ರೇಲಿನಲ್ಲಿದ್ದ ಯೇಹುವಿನ ಬಳಿಗೆ ಕಳುಹಿಸಿದರು.
10:8b.2KI.010.008 ಆಗ ಆ ಸೇವಕರು ಬಂದು ಅವನಿಗೆಅರಸನ ಮಕ್ಕಳ ತಲೆಗಳನ್ನು ತೆಗೆದುಕೊಂಡು ಬಂದಿ ದ್ದಾರೆಂದು ತಿಳಿಸಿದರು. ಅದಕ್ಕವನು--ಉದಯ ಕಾಲದ ವರೆಗೂ ಅವುಗಳನ್ನು ಹೆಬ್ಬಾಗಿಲಿನ ದ್ವಾರದಲ್ಲಿ ಎರಡು ಕುಪ್ಪೆಗಳಾಗಿ ಹಾಕಿರಿ ಅಂದನು.
10:9b.2KI.010.009 ಉದಯ ಕಾಲದಲ್ಲಿ ಏನಾಯಿತೆಂದರೆ, ಅವನು ಹೊರಟು ನಿಂತು ಎಲ್ಲಾ ಜನರಿಗೆ ಹೇಳಿದ್ದೇನಂದರೆ -- ನೀವು ನೀತಿವಂತರು; ಇಗೋ, ನಾನು ನನ್ನ ಯಜಮಾನನ ಮೇಲೆ ಒಳಸಂಚು ಮಾಡಿ ಅವನನ್ನು ಕೊಂದುಹಾಕಿದೆನು.
10:10b.2KI.010.010 ಆದರೆ ಇವರೆಲ್ಲರನ್ನು ಸಂಹರಿಸಿದವರಾರು? ಕರ್ತನು ಅಹಾ ಬನ ಮನೆಯನ್ನು ಕುರಿತು ಹೇಳಿದ ಕರ್ತನ ಮಾತು ಗಳಲ್ಲಿ ಒಂದೂ ವ್ಯರ್ಥವಾಗುವದಿಲ್ಲವೆಂದು ನೀವು ತಿಳಿದುಕೊಳ್ಳಿರಿ. ಕರ್ತನು ತನ್ನ ಸೇವಕನಾದ ಎಲೀಯನ ಮುಖಾಂತರ ಹೇಳಿದ್ದನ್ನು ನೆರವೇರಿಸಿದ್ದಾನೆ ಅಂದನು.
10:11b.2KI.010.011 ಈ ಪ್ರಕಾರ ಯೇಹುವು ಅಹಾಬನಿಗೆ ಯಾರನ್ನೂ ಉಳಿಯಗೊಡಿಸದೆ ಇರುವ ವರೆಗೂ ಇಜ್ರೇಲಿನಲ್ಲಿ ಅವನಿಗೆ ಉಳಿದ ಎಲ್ಲಾ ಮನೆಯವರನ್ನೂ ಅವನ ಎಲ್ಲಾ ಹಿರಿಯರನ್ನೂ ನೆಂಟರನ್ನೂ ಯಾಜಕರನ್ನೂ ಸಂಹರಿಸಿದನು.
10:12b.2KI.010.012 ಅವನು ಎದ್ದು ಹೊರಟು ಸಮಾರ್ಯಕ್ಕೆ ಬಂದನು. ಯೇಹುವು ದಾರಿಯಲ್ಲಿರುವ ಕುರುಬರು ಉಣ್ಣೆ ಕತ್ತರಿಸುವ ಮನೆಯ ಬಳಿಗೆ ಬಂದಾಗ
10:13b.2KI.010.013 ಯೆಹೂ ದದ ಅರಸನಾದ ಅಹಜ್ಯನ ಸಹೋದರರನ್ನು ಕಂಡು ಅವರಿಗೆ--ನೀವು ಯಾರು ಅಂದನು. ಅದಕ್ಕವರು--ನಾವು ಅಹಜ್ಯನ ಸಹೋದರರು; ಅರಸನ ಮಕ್ಕ ಳನ್ನೂ ರಾಣಿಯ ಮಕ್ಕಳನ್ನೂ ವಂದಿಸಲು ಹೋಗುತ್ತೇವೆ ಅಂದರು.
10:14b.2KI.010.014 ಆಗ ಅವನು ಅವರನ್ನು ಜೀವದಿಂದ ಹಿಡಿಯಿರಿ ಎಂದು ಅವನು ಹೇಳಿದ್ದರಿಂದ ಅವರು ಇವರನ್ನು ಜೀವದಿಂದ ಹಿಡಿದು ಉಣ್ಣೆ ಕತ್ತರಿಸುವ ಮನೆಯ ಕುಣಿಯ ಬಳಿಯಲ್ಲಿ ಕೊಂದುಹಾಕಿದರು. ಅವರು ನಲವತ್ತೆರಡು ಮಂದಿ ಇದ್ದರು. ಅವರಲ್ಲಿ ಒಬ್ಬನನ್ನೂ ಉಳಿಸಲಿಲ್ಲ.
10:15b.2KI.010.015 ಯೇಹುವು ಅಲ್ಲಿಂದ ಹೋಗಿ ತನ್ನನ್ನು ಎದುರು ಗೊಳ್ಳಲು ರೇಕಾಬನ ಮಗನಾದ ಯೆಹೋನಾದಾ ಬನನ್ನು ಕಂಡು ಅವನನ್ನು ವಂದಿಸಿ ಅವನಿಗೆ--ನನ್ನ ಹೃದಯವು ನಿನ್ನ ಹೃದಯದೊಂದಿಗೆ ಇರುವಂತೆ ನಿನ್ನ ಹೃದಯವು ನನ್ನೊಂದಿಗೆ ಸರಿಯಾಗಿದೆಯೋ ಅಂದನು. ಯೆಹೋನಾದಾಬನು--ಅದೆ ಅಂದನು. ಹಾಗಾದರೆ ನಿನ್ನ ಕೈಕೊಡು ಅಂದನು. ಇವನು ತನ್ನ ಕೈಕೊಟ್ಟನು. ತನ್ನ ಬಳಿಗೆ ರಥದ ಮೇಲೆ ಏರಿಸಿಕೊಂಡು ಅವ ನಿಗೆ--
10:16b.2KI.010.016 ನೀನು ನನ್ನ ಸಂಗಡ ಬಂದು ಕರ್ತನಿಗೋ ಸ್ಕರ ನನಗುಂಟಾದ ಆಸಕ್ತಿಯನ್ನು ನೋಡು ಎಂದು ಹೇಳಿ ಅವನನ್ನು ತನ್ನ ರಥದಲ್ಲಿ ಕೂಡ್ರಿಸಿಕೊಂಡನು.
10:17b.2KI.010.017 ಅವನು ಸಮಾರ್ಯಕ್ಕೆ ಬಂದ ತರುವಾಯ ಸಮಾ ರ್ಯದಲ್ಲಿ ಕರ್ತನು ಎಲೀಯನಿಗೆ ಹೇಳಿದ ವಾಕ್ಯದ ಪ್ರಕಾರ ಅವನನ್ನು ನಾಶಮಾಡುವ ಪರ್ಯಂತರ ಅಹಾಬನಿಗೆ ಉಳಿದವರೆಲ್ಲರನ್ನು ಸಂಹರಿಸಿದನು.
10:18b.2KI.010.018 ಯೇಹುವು ಜನರೆಲ್ಲರನ್ನು ಕೂಡಿಸಿ ಅವರಿಗೆ-- ಅಹಾಬನು ಸ್ವಲ್ಪವಾಗಿ ಬಾಳನನ್ನು ಸೇವಿಸಿದನು; ಆದರೆ ಯೇಹುವು ಅವನನ್ನು ಬಹಳವಾಗಿ ಸೇವಿಸುವನು.
10:19b.2KI.010.019 ಆದದರಿಂದ ಬಾಳನ ಎಲ್ಲಾ ಪ್ರವಾದಿಗಳನ್ನೂ ಸೇವಕರನ್ನೂ ಯಾಜಕರನ್ನೂ ನನ್ನ ಬಳಿಗೆ ಕರೆಯಿರಿ; ಒಬ್ಬನೂ ಬಾರದೆ ಇರಕೂಡದು. ನಾನು ಬಾಳನಿಗೆ ಮಹಾಬಲಿ ಕೊಡಬೇಕಾಗಿದೆ. ಯಾವನಾದರೂ ಬಾರದೆ ಹೋದರೆ ಅವನು ಬದುಕನು ಅಂದನು. ಯಾಕಂದರೆ ಯೇಹುವು ಬಾಳನನ್ನು ಆರಾಧಿಸುವ ವರನ್ನು ನಾಶಮಾಡುವ ಹಾಗೆ ಇದನ್ನು ತಂತ್ರದಿಂದ ಮಾಡಿದನು.
10:20b.2KI.010.020 ಆಗ ಯೇಹುವು ಬಾಳನಿಗೋಸ್ಕರ ದೊಡ್ಡಸಂಘವನ್ನು ಪರಿಶುದ್ಧ ಮಾಡಿರಿ ಅಂದನು.
10:21b.2KI.010.021 ಹಾಗೆಯೇ ಅವರು ಅದನ್ನು ಸಾರಿದರು. ಯೇಹುವು ಇಸ್ರಾಯೇಲಿನಲ್ಲೆಲ್ಲಾ ಕಳುಹಿಸಿದ್ದರಿಂದ ಬಾಳನನ್ನು ಸೇವಿಸುವವರೆಲ್ಲರೂ ಬಂದರು. ಬಾರದೆ ಇದ್ದವನು ಒಬ್ಬನೂ ಇರಲಿಲ್ಲ. ಅವರು ಬಾಳನ ಮನೆಯಲ್ಲಿ ಪ್ರವೇಶಿಸಿದಾಗ ಒಂದು ಕಡೆಯಿಂದ ಇನ್ನೊಂದು ಕಡೆಯ ವರೆಗೆ ಬಾಳನ ಮನೆಯು ಪೂರ್ಣವಾಗಿ ತುಂಬಿತ್ತು.
10:22b.2KI.010.022 ಆಗ ಅವನು ವಸ್ತ್ರಗಳ ಮನೆಯ ಮೇಲೆ ಇರುವವನಿಗೆ ಬಾಳನನ್ನು ಸೇವಿಸುವ ಎಲ್ಲರಿಗೋಸ್ಕರ ವಸ್ತ್ರಗಳನ್ನು ತಕ್ಕೊಂಡು ಬಾ ಎಂದು ಹೇಳಿದ್ದರಿಂದ ಅವನು ಅವರಿಗೋಸ್ಕರ ವಸ್ತ್ರಗಳನ್ನು ತಕ್ಕೊಂಡು ಬಂದನು.
10:23b.2KI.010.023 ಆಗ ಯೇಹುವೂ ರೆಕಾಬನ ಮಗನಾದ ಯೆಹೋನಾದಾಬನೂ ಬಾಳನ ಮನೆಯಲ್ಲಿ ಪ್ರವೇಶಿಸಿ ದರು. ಅವರು ಬಾಳನನ್ನು ಆರಾಧಿಸುವವರ ಹೊರತು ಅವರ ಸಂಗಡ ಕರ್ತನ ಸೇವಕರಲ್ಲಿ ಒಬ್ಬನಾದರೂ ಇರದ ಹಾಗೆ ಶೋಧಿಸಿ ನೋಡಿರಿ ಎಂದು ಬಾಳನನ್ನು ಆರಾಧಿಸುವವರಿಗೆ ಹೇಳಿದರು.
10:24b.2KI.010.024 ಅವರು ಬಲಿಗ ಳನ್ನೂ ದಹನಬಲಿಗಳನ್ನೂ ಅರ್ಪಿಸಲು ಒಳಗೆ ಪ್ರವೇ ಶಿಸಿದ ತರುವಾಯ ಯೇಹುವು ಹೊರಗೆ ಎಂಭತ್ತು ಮಂದಿಯನ್ನು ಇರಿಸಿಕೊಂಡು ಅವರಿಗೆ--ನಾನು ನಿಮ್ಮ ಕೈಗೆ ಒಪ್ಪಿಸಿದ ಜನರಲ್ಲಿ ಯಾವನಾದರೂ ತಪ್ಪಿಸಿಕೊಂಡು ಹೋದರೆ ಅವನ ಪ್ರಾಣಕ್ಕೆ ನಿಮ್ಮ ಪ್ರಾಣ ಈಡಾಗಿ ರುವದು ಅಂದನು.
10:25b.2KI.010.025 ಅವನು ದಹನಬಲಿಯನ್ನು ಅರ್ಪಿಸಿ ತೀರಿಸಿದ ತರುವಾಯ ಏನಾಯಿತಂದರೆ, ಯೇಹುವು ಕಾವಲುಗಾರನಿಗೂ ಅಧಿಪತಿಗಳಿಗೂನೀವು ಒಳಗೆ ಹೋಗಿ ಯಾವನೂ ಹೊರಗೆ ಬಾರದ ಹಾಗೆ ಅವರನ್ನು ಸಂಹರಿಸಿರಿ ಅಂದನು.
10:26b.2KI.010.026 ಹಾಗೆಯೇ ಅವರನ್ನು ಕತ್ತಿಯಿಂದ ಸಂಹರಿಸಿದರು. ಕಾವಲು ಗಾರನೂ ಅಧಿಪತಿಗಳೂ ಅವರನ್ನು ಹೊರಗೆ ಹಾಕಿದ ತರುವಾಯ ಬಾಳನ ಮನೆಯ ಪಟ್ಟಣಕ್ಕೆ ಹೋಗಿ ಬಾಳನ ಮನೆಯಿಂದ ವಿಗ್ರಹವನ್ನು ತಂದು ಅವುಗಳನ್ನು ಸುಟ್ಟುಬಿಟ್ಟರು.
10:27b.2KI.010.027 ಇದಲ್ಲದೆ ಅವರು ಬಾಳನ ವಿಗ್ರಹ ವನ್ನು ಒಡೆದುಹಾಕಿ ಬಾಳನ ಮನೆಯನ್ನು ಕೆಡವಿಬಿಟ್ಟು ಅದನ್ನು ಈ ಹೊತ್ತಿನ ವರೆಗೂ ತಿಪ್ಪೆಯಾಗಿ ಮಾಡಿದರು.
10:28b.2KI.010.028 ಹೀಗೆಯೇ ಯೇಹುವು ಬಾಳನನ್ನು ಇಸ್ರಾಯೇಲಿ ನಲ್ಲಿಂದ ನಾಶಮಾಡಿಬಿಟ್ಟನು.
10:29b.2KI.010.029 ಆದರೆ ಬೇತೇಲ್, ದಾನ್‌ನಲ್ಲಿಯೂ ಇರುವ ಬಂಗಾರದ ಹೋರಿಗಳಿಂದ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ಯೇಹುವು ತೊರೆದುಬಿಡಲಿಲ್ಲ.
10:30b.2KI.010.030 ಕರ್ತನು ಯೇಹು ವಿಗೆ--ನೀನು ನನ್ನ ದೃಷ್ಟಿಗೆ ಸರಿಯಾದದ್ದನ್ನು ನಡಿಸಿ ನನ್ನ ಹೃದಯದಲ್ಲಿದ್ದ ಎಲ್ಲಾದರ ಪ್ರಕಾರ ಅಹಾಬನ ಮನೆಗೆ ಮಾಡಿ ಯುಕ್ತವಾದದ್ದನ್ನು ಮಾಡಿದ್ದರಿಂದ ನಿನ್ನ ಮಕ್ಕಳು ನಾಲ್ಕು ವಂಶಗಳ ವರೆಗೂ ಇಸ್ರಾಯೇ ಲಿನ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು ಅಂದನು.
10:31b.2KI.010.031 ಆದರೆ ಯೇಹುವು ತನ್ನ ಪೂರ್ಣಹೃದಯ ದಿಂದ ಇಸ್ರಾಯೇಲಿನ ದೇವರಾದ ಕರ್ತನ ನ್ಯಾಯ ಪ್ರಮಾಣದಲ್ಲಿ ನಡೆಯುವ ಹಾಗೆ ಎಚ್ಚರಿಕೆಯಾಗಿರ ಲಿಲ್ಲ; ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿ ಸಿದ ಯಾರೊಬ್ಬಾಮನ ಪಾಪಗಳನ್ನು ತೊರೆದು ಬಿಡಲಿಲ್ಲ.
10:32b.2KI.010.032 ಆ ದಿವಸಗಳಲ್ಲಿ ಕರ್ತನು ಇಸ್ರಾಯೇಲನ್ನು ಕಡಿಮೆ ಮಾಡಲು ಆರಂಭಿಸಿದನು. ಯಾಕಂದರೆ ಹಜಾಯೇ ಲನು ಇಸ್ರಾಯೇಲಿನ ಎಲ್ಲಾ ಮೇರೆಗಳಲ್ಲಿ ಅವರನ್ನು ಸಂಹರಿಸಿದನು.
10:33b.2KI.010.033 ಮೂಡಣದಲ್ಲಿ ಯೊರ್ದನ್ ಮೊದಲುಗೊಂಡು ಗಾದ್ಯರೂ ರೂಬೆನ್ಯರೂ ವಾಸ ವಾಗಿದ್ದ ಗಿಲ್ಯಾದಿನ ಎಲ್ಲಾ ದೇಶವನ್ನೂ ಅರ್ನೋನ್ ನದಿಯ ಬಳಿಯಲ್ಲಿರುವ ಅರೋಯೇರ್ ಮೊದಲು ಗೊಂಡು ಮನಸ್ಸೆಯವರು ನಿವಾಸವಾಗಿದ್ದ ಗಿಲ್ಯಾದ್ ಬಾಶಾನ್ ಸಂಹರಿಸಿದನು.
10:34b.2KI.010.034 ಆದರೆ ಯೇಹುವಿನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ
10:35b.2KI.010.035 ಅವನ ಪರಾಕ್ರಮವೆಲ್ಲವೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆದಿರುತ್ತವೆ. ಯೇಹುವು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನನ್ನು ಸಮಾರ್ಯದಲ್ಲಿ ಹೂಣಿಟ್ಟರು. ಅವನ ಮಗನಾದ ಯೆಹೋವಾಹಾಜನು ಅವನಿಗೆ ಬದಲಾಗಿ ಆಳಿದನು.ಯೇಹುವು ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಆಳಿದ್ದು ಇಪ್ಪತ್ತೆಂಟು ವರುಷಗಳು.
10:36b.2KI.010.036 ಯೇಹುವು ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಆಳಿದ್ದು ಇಪ್ಪತ್ತೆಂಟು ವರುಷಗಳು.
11
11:1b.2KI.011.001 ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗನು ಸತ್ತು ಹೋದದ್ದನ್ನು ನೋಡಿ ಎದ್ದು ರಾಜ ಸಂತಾನದವರನ್ನೆಲ್ಲಾ ನಾಶಮಾಡಿದಳು.
11:2b.2KI.011.002 ಆದರೆ ಅರಸನಾದ ಯೆಹೋರಾಮನಿಗೆ ಮಗಳಾದ ಯೆಹೋಷೆಬಳು ಕೊಂದುಹಾಕಲ್ಪಟ್ಟ ಅರಸನ ಮಕ್ಕಳ ಮಧ್ಯದಿಂದ ಅಹಜ್ಯನ ಮಗನಾದ ಯೆಹೋವಾಷ ನನ್ನು ಕದ್ದುಕೊಂಡಳು. ಆದದರಿಂದ ಅವನು ಕೊಲ್ಲಲ್ಪ ಡದ ಹಾಗೆ ಅವನನ್ನೂ ಅವನ ದಾದಿಯನ್ನೂ ಅತಲ್ಯ ಳಿಗೆ ಕಾಣದ ಹಾಗೆ ಮಲಗುವ ಮನೆಯಲ್ಲಿ ಬಚ್ಚಿಟ್ಟಳು.
11:3b.2KI.011.003 ಹಾಗೆಯೇ ಅವನು ಅವಳ ಸಂಗಡ ಆರು ವರುಷ ಕರ್ತನ ಮನೆಯಲ್ಲಿ ಬಚ್ಚಿಡಲ್ಪಟ್ಟಿದ್ದನು. ಅತಲ್ಯಳು ದೇಶದ ಮೇಲೆ ಆಳುತ್ತಾ ಇದ್ದಳು.
11:4b.2KI.011.004 ಆದರೆ ಏಳನೇ ವರುಷದಲ್ಲಿ ಯೆಹೋಯಾದಾ ವನು ನೂರಕ್ಕೆ ಅಧಿಪತಿಯಾದವರನ್ನೂ ರಾಣುವೆಯ ಅಧಿಪತಿಗಳನ್ನೂ ಕಾವಲುಗಾರರ ಸಹಿತವಾಗಿ ಕರೆಯ ಕಳುಹಿಸಿ ತನ್ನ ಬಳಿಗೆ ಕರ್ತನ ಮನೆಗೆ ಕರಕೊಂಡು ಅವರ ಸಂಗಡ ಒಡಂಬಡಿಕೆಯನ್ನು ಮಾಡಿ ಕರ್ತನ ಮನೆಯಲ್ಲಿ ಅವರಿಂದ ಪ್ರಮಾಣ ತೆಗೆದುಕೊಂಡು ಅವರಿಗೆ ಅರಸನ ಮಗನನ್ನು ತೋರಿಸಿ
11:5b.2KI.011.005 ಅವರಿಗೆ ಆಜ್ಞಾಪಿಸಿ--ನೀವು ಮಾಡಬೇಕಾದದ್ದೇನಂದರೆ ಸಬ್ಬತ್ ದಿವಸದಲ್ಲಿ ಪ್ರವೇಶಿಸುವವರಾದ ನಿಮ್ಮೊಳಗಿನ ಮೂರನೇ ಭಾಗವು ಅರಸನ ಮನೆಯ ಕಾವಲಿನ ಮೇಲೆ ಕಾವಲುಗಾರರಾಗಿ ಇರ್ರಿ.
11:6b.2KI.011.006 ಮೂರನೇ ಭಾಗವು ಸೂರ್ ಎಂಬ ಬಾಗಲ ಬಳಿಯಲ್ಲಿಯೂ ಮತ್ತೊಂದು ಮೂರನೇ ಭಾಗವು ಕಾವಲಿನ ಹಿಂದೆ ಇರುವ ಬಾಗಲ ಬಳಿಯಲ್ಲಿಯೂ ಇರ್ರಿ. ಹೀಗೆಯೇ ಮನೆಯ ಕಾವಲು ಮುರಿಯಲ್ಪಡದ ಹಾಗೆ ಅದನ್ನು ಕಾಯಿರಿ.
11:7b.2KI.011.007 ಇದಲ್ಲದೆ ಸಬ್ಬತ್ ದಿವಸದಲ್ಲಿ ಹೊರಡುವ ನಿಮ್ಮೆಲ್ಲರಲ್ಲಿ ಎರಡು ಭಾಗ ಅರಸನ ಬಳಿಯಲ್ಲಿ ಕರ್ತನ ಮನೆಯ ಕಾವಲು ಕಾಯುವವರಾಗಿರ್ರಿ.
11:8b.2KI.011.008 ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ಆಯುಧಗಳನ್ನು ಹಿಡುಕೊಂಡು ಅರಸ ನನ್ನು ಸುತ್ತಿಕೊಂಡಿರ್ರಿ; ಯಾವನಾದರೂ ಸಾಲುಗಳಲ್ಲಿ ಬಂದರೆ ಅವನು ಕೊಲೆಯಾಗಲಿ. ಆದರೆ ಅರಸನು ಹೊರಗೆ ಹೋಗುವಾಗಲೂ ಒಳಗೆ ಬರುವಾಗಲೂ ನೀವು ಅವನ ಸಂಗಡ ಇರ್ರಿ.
11:9b.2KI.011.009 ಹಾಗೆಯೇ ನೂರಕ್ಕೆ ಅಧಿಪತಿಯಾದವರು ಯಾಜಕನಾದ ಯೆಹೋಯಾದಾ ವನು ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಮಾಡಿ ಪ್ರತಿ ಮನುಷ್ಯನು ಸಬ್ಬತ್ ದಿವಸದಲ್ಲಿ ಪ್ರವೇಶಿಸಬೇಕಾದ ತನ್ನ ಜನರನ್ನೂ ಸಬ್ಬತ್ ದಿವಸದಲ್ಲಿ ಹೊರಗೆ ಹೋಗಲು ಬೇಕಾದವರನ್ನೂ ಯಾಜಕನಾದ ಯೆಹೋ ಯಾದಾವನ ಬಳಿಗೆ ಕರಕೊಂಡು ಬಂದರು.
11:10b.2KI.011.010 ಆಗ ಯಾಜಕನು ಕರ್ತನ ಆಲಯದಲ್ಲಿದ್ದ ಅರಸನಾದ ದಾವೀದನ ಈಟಿಗಳನ್ನೂ ಗುರಾಣಿಗಳನ್ನೂ ನೂರಕ್ಕೆ ಅಧಿಪತಿಯಾದವರಿಗೆ ಕೊಟ್ಟನು.
11:11b.2KI.011.011 ಕಾವಲುಗಾರರಲ್ಲಿ ಪ್ರತಿ ಮನುಷ್ಯನು ತನ್ನ ಆಯುಧಗಳನ್ನು ಕೈಯಲ್ಲಿ ಹಿಡುಕೊಂಡು ಬಲಿಪೀಠದ ಬಳಿಯಲ್ಲಿಯೂ ಆಲಯದ ಬಳಿಯಲ್ಲಿಯೂ ಆಲಯದ ಬಲಪಾರ್ಶ್ವ ಮೊದಲು ಗೊಂಡು ಎಡಪಾರ್ಶ್ವದ ವರೆಗೂ ಅರಸನ ಸುತ್ತಲೂ ನಿಂತುಕೊಂಡರು.
11:12b.2KI.011.012 ಆಗ ಅವನು ಅರಸನ ಮಗನನ್ನು ಹೊರಗೆ ಕರತಂದು ಕಿರೀಟವನ್ನು ಅವನ ತಲೆಯ ಮೇಲೆ ಇರಿಸಿ ಸಾಕ್ಷಿಯನ್ನು ಕೊಟ್ಟನು. ಅವರು ಅವನನ್ನು ಅರಸನಾಗ ಮಾಡಿ ಅಭಿಷೇಕಿಸಿ ಚಪ್ಪಾಳೆ ಹೊಡೆದುಅರಸನು ಬಾಳಲಿ ಅಂದರು.
11:13b.2KI.011.013 ಅತಲ್ಯಳು ಕಾವಲುಗಾರರ ಶಬ್ದವನ್ನೂ ಜನರ ಶಬ್ದವನ್ನೂ ಕೇಳಿದಾಗ ಕರ್ತನ ಆಲಯದಲ್ಲಿದ್ದ ಜನರ ಬಳಿಗೆ ಬಂದಳು.
11:14b.2KI.011.014 ಅವಳು ದೃಷ್ಟಿಸಿ ನೋಡುವಾಗ ಇಗೋ, ಅರಸನು ಪದ್ಧತಿಯ ಪ್ರಕಾರ ಸ್ತಂಭದ ಬಳಿ ಯಲ್ಲಿ ನಿಂತಿದ್ದನು. ಪ್ರಧಾನರೂ ತುತೂರಿ ಊದು ವವರೂ ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದಿದರು. ಆಗ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದು ಕೊಂಡು--ದ್ರೋಹ, ದ್ರೋಹ ಎಂದು ಕೂಗಿದಳು.
11:15b.2KI.011.015 ಆದರೆ ಯಾಜಕನಾದ ಯೆಹೋಯಾದಾವನು ನೂರರ ಅಧಿಪತಿಗಳಿಗೂ ಸೈನ್ಯದ ಅಧಿಕಾರಿಗಳಿಗೂಸಾಲುಗಳ ಹೊರಗೆ ಅವಳನ್ನು ಹೊರಡಿಸಿರಿ ಎಂದೂ ಅವಳನ್ನು ಹಿಂಬಾಲಿಸುವವನು ಕತ್ತಿಯಿಂದ ಕೊಲ್ಲ ಲ್ಪಡಲಿ ಎಂದೂ ಹೇಳಿ ಆಜ್ಞಾಪಿಸಿದನು. ಯಾಕಂದರೆ ಅವಳು ಕರ್ತನ ಮಂದಿರದಲ್ಲಿ ಕೊಲೆಯಾಗಬಾರ ದೆಂದು ಯಾಜಕನು ಹೇಳಿದನು.
11:16b.2KI.011.016 ಆಗ ಅವರು ಅವಳನ್ನು ಹಿಡಿದು ಕುದುರೆಗಳು ಅರಸನ ಮನೆಯೊಳಕ್ಕೆ ಬರುವ ಮಾರ್ಗದಲ್ಲಿ ಅವಳನ್ನು ಕೊಲೆಮಾಡಿದರು.
11:17b.2KI.011.017 ಯೆಹೋಯಾದಾವನು ಕರ್ತನಿಗೂ ಅರಸನಿಗೂ ಜನರಿಗೂ ಮಧ್ಯೆ ಒಡಂಬಡಿಕೆ ಮಾಡಿದನು. ಆ ಸಮಯದಲ್ಲಿ ಕರ್ತನ ಜನರಾಗಿರುವ ಹಾಗೆ ಅರಸ ನಿಗೂ ಜನರಿಗೂ ಮಧ್ಯೆ ಒಡಂಬಡಿಕೆ ಮಾಡಿದನು.
11:18b.2KI.011.018 ದೇಶದ ಜನರೆಲ್ಲರೂ ಬಾಳನ ಮನೆಯಲ್ಲಿ ಹೊಕ್ಕು ಅದನ್ನು ಕೆಡವಿಹಾಕಿ ಅವನ ಬಲಿಪೀಠಗಳನ್ನೂ ವಿಗ್ರಹ ಗಳನ್ನೂ ಸಂಪೂರ್ಣವಾಗಿ ತುಂಡುತುಂಡಾಗಿ ಒಡೆದು ಬಿಟ್ಟು ಬಲಿಪೀಠಗಳ ಮುಂದೆ ಬಾಳನ ಯಾಜಕನಾದ ಮತ್ತಾನನನ್ನು ಕೊಂದುಹಾಕಿದರು. ಇದಲ್ಲದೆ ಯಾಜಕನು ಕರ್ತನ ಮನೆಯಲ್ಲಿ ಅಧಿಕಾರಿಗಳನ್ನು ನೇಮಿಸಿ ದನು.
11:19b.2KI.011.019 ಆಗ ಅವನು ನೂರಕ್ಕೆ ಅಧಿಪತಿಗಳನ್ನೂ ಅಧಿಕಾರಿಗಳನ್ನೂ ಕಾವಲುಗಾರರನ್ನೂ ದೇಶದ ಜನ ರೆಲ್ಲರನ್ನೂ ತನ್ನ ಬಳಿಗೆ ಕರಕೊಂಡ ಮೇಲೆ ಅವರು ಅರಸನನ್ನು ಕರ್ತನ ಮನೆಯಿಂದ ಕಾವಲುಗಾರರ ಬಾಗಲ ಮಾರ್ಗವಾಗಿ ಅರಮನೆಗೆ ಕರಕೊಂಡು ಬಂದು ಅರಸುಗಳ ಸಿಂಹಾಸನದ ಮೇಲೆ ಕೂಡ್ರಿಸಿದರು.
11:20b.2KI.011.020 ಆಗ ದೇಶದ ಜನರೆಲ್ಲರೂ ಸಂತೋಷಪಟ್ಟರು; ಪಟ್ಟಣವು ಶಾಂತವಾಗಿತ್ತು. ಆದರೆ ಅತಲ್ಯಳನ್ನು ಅರಮನೆಯ ಬಳಿಯಲ್ಲಿ ಕತ್ತಿಯಿಂದ ಕೊಂದುಹಾಕಿ ದರು.ಯೆಹೋವಾಷನು ಏಳು ವರುಷದವನಾ ಗಿದ್ದಾಗ ಆಳಲು ಆರಂಭಿಸಿದನು.
11:21b.2KI.011.021 ಯೆಹೋವಾಷನು ಏಳು ವರುಷದವನಾ ಗಿದ್ದಾಗ ಆಳಲು ಆರಂಭಿಸಿದನು.
12
12:1b.2KI.012.001 ಯೇಹುವಿನ ಆಳ್ವಿಕೆಯ ಏಳನೇ ವರುಷದಲ್ಲಿ ಯೆಹೋವಾಷನು ಆಳಲು ಆರಂಭಿಸಿ ಯೆರೂಸಲೇಮಿನಲ್ಲಿ ನಾಲ್ವತ್ತು ವರುಷ ಆಳಿದನು.
12:2b.2KI.012.002 ಅವನ ತಾಯಿಯು ಬೇರ್ಷೆಬ ಊರಿನವಳಾದ ಚಿಬ್ಯಳು. ಆದರೆ ಯಾಜಕನಾದ ಯೆಹೋಯಾ ದಾವನು ಯೆಹೋವಾಷನಿಗೆ ಬೋಧಿಸಿದ ಎಲ್ಲಾ ದಿವಸಗಳಲ್ಲಿ ಅವನು ಕರ್ತನ ದೃಷ್ಟಿಯಲ್ಲಿ ಸರಿಯಾದ ದ್ದನ್ನು ಮಾಡಿದನು.
12:3b.2KI.012.003 ಉನ್ನತ ಸ್ಥಳಗಳು ಮಾತ್ರ ಕೆಡವಲ್ಪಡದೆ ಇದ್ದವು; ಜನರು ಉನ್ನತ ಸ್ಥಳಗಳ ಮೇಲೆ ಬಲಿಯನ್ನೂ ಧೂಪವನ್ನೂ ಅರ್ಪಿಸುತ್ತಾ ಇದ್ದರು.
12:4b.2KI.012.004 ಆಗ ಯೆಹೋವಾಷನು ಯಾಜಕರಿಗೆ--ಕರ್ತನ ಮನೆಗೆ ತರಲ್ಪಟ್ಟ ಪ್ರತಿಷ್ಠಿತವಾದವುಗಳ ಹಣವೆಲ್ಲ ವನ್ನೂ ಹಾದು ಹೋಗುವ ಪ್ರತಿ ಮನುಷ್ಯನ ಹಣ ವನ್ನೂ ಪ್ರಾಣಗಳ ಎಣಿಕೆಯ ಹಣವನ್ನೂ ಪ್ರತಿ ಮನುಷ್ಯನು ತನ್ನ ಇಚ್ಚೆಯ ಪ್ರಕಾರ ಕರ್ತನ ಆಲಯಕ್ಕೆ ಕೊಡಬೇಕೆಂದು ತಕ್ಕೊಂಡು ಬಂದ ಹಣವೆಲ್ಲವನ್ನೂ
12:5b.2KI.012.005 ಯಾಜಕರಲ್ಲಿ ಪ್ರತಿಯೊಬ್ಬನು ತನ್ನ ತನ್ನ ಪರಿಚಯ ದವರಿಂದ ತಕ್ಕೊಂಡು ಆಲಯದಲ್ಲಿ ಕಂಡುಬರುವ ಒಡಕುಗಳನ್ನೆಲ್ಲಾ ದುರಸ್ತುಮಾಡಲಿ ಅಂದನು.
12:6b.2KI.012.006 ಆದರೆ ಅರಸನಾದ ಯೆಹೋವಾಷನ ಇಪ್ಪತ್ತ ಮೂರನೇ ವರುಷದ ವರೆಗೂ ಯಾಜಕರು ಮನೆಯ ಒಡಕುಗ ಳನ್ನು ದುರಸ್ತು ಮಾಡದೆ ಇದ್ದರು.
12:7b.2KI.012.007 ಆಗ ಅರಸನಾದ ಯೆಹೋವಾಷನು ಯಾಜಕನಾದ ಯೆಹೋಯಾದಾ ವನನ್ನೂ ಯಾಜಕರನ್ನೂ ಕರೆದು ಅವರಿಗೆ--ನೀವು ಮನೆಯ ಒಡಕುಗಳನ್ನು ದುರಸ್ತುಮಾಡದೆ ಇರುವ ದೇನು? ಇನ್ನು ಮೇಲೆ ನೀವು ನಿಮ್ಮ ಪರಿಚಯದವ ರಿಂದ ಹಣವನ್ನು ತೆಗೆದುಕೊಳ್ಳದೆ ಮನೆಯ ಒಡಕು ಗಳಿಗೋಸ್ಕರ ಅದನ್ನು ಒಪ್ಪಿಸಿಕೊಡಿರಿ ಅಂದನು.
12:8b.2KI.012.008 ಹಾಗೆಯೇ ಯಾಜಕರು ಜನರ ಕೈಯಿಂದ ಹಣವನ್ನು ತೆಗೆದುಕೊಳ್ಳದೆ ಇರುವದಕ್ಕೂ ಮನೆಯ ಒಡುಕುಗ ಳನ್ನು ದುರಸ್ತು ಮಾಡದೆ ಇರುವದಕ್ಕೂ ಸಮ್ಮತಿಸಿ ದರು.
12:9b.2KI.012.009 ಆದರೆ ಯಾಜಕನಾದ ಯೆಹೋಯಾದಾವನು ಒಂದು ಪೆಟ್ಟಿಗೆಯನ್ನು ತಕ್ಕೊಂಡು ಅದರ ಮುಚ್ಚಳದಲ್ಲಿ ತೂತನ್ನು ಮಾಡಿ ಬಲಿಪೀಠದ ಬಳಿಯಲ್ಲಿ ಕರ್ತನ ಮನೆಯೊಳಗೆ ಪ್ರವೇಶದ ಬಲಗಡೆಯಲ್ಲಿ ಇಟ್ಟನು. ಆಗ ಬಾಗಲು ಕಾಯುವ ಯಾಜಕರು ಕರ್ತನ ಮನೆಗೆ ತರಲ್ಪಟ್ಟ ಹಣವನ್ನೆಲ್ಲಾ ಅದರಲ್ಲಿ ಹಾಕಿದರು.
12:10b.2KI.012.010 ಪೆಟ್ಟಿಗೆ ಯಲ್ಲಿ ಬಹಳ ಹಣ ಉಂಟೆಂದು ಅವರು ನೋಡಿ ಅರಸನ ಲೇಖಕನೂ ಪ್ರಧಾನಯಾಜಕನೂ ಂದು ಕರ್ತನ ಮನೆಯಲ್ಲಿ ಸಿಕ್ಕಿದ ಹಣವನ್ನು ಎಣಿಸಿ ಚೀಲದಲ್ಲಿ ಹಾಕಿದರು.
12:11b.2KI.012.011 ಅವರು ಎಣಿಸಿದ ಹಣವನ್ನು ಕರ್ತನ ಮನೆಯ ವಿಚಾರಣೆಯ ಕೆಲಸ ಮಾಡುವವರ ಕೈಯಲ್ಲಿ ಅದನ್ನು ಒಪ್ಪಿಸಿದರು. ಇವರು ಕರ್ತನ ಮನೆಯಲ್ಲಿ ಕೆಲಸ ಮಾಡುವ ಬಡಗಿಯವರಿಗೂ ಶಿಲ್ಪಿಗಾರರಿಗೂ ಉಪ್ಪಾರರಿಗೂ ಕಲ್ಲುಕುಟಿಗರಿಗೂ ಕೊಟ್ಟರು.
12:12b.2KI.012.012 ಇದ ಲ್ಲದೆ ಕರ್ತನ ಮನೆಯ ಒಡಕುಗಳನ್ನು ದುರಸ್ತು ಮಾಡುವದಕ್ಕೆ ಮರವನ್ನೂ ಕೆತ್ತಿದಕಲ್ಲುಗಳನ್ನೂ ತೆಗೆದು ಕೊಳ್ಳುವದಕ್ಕೂ ಮನೆ ದುರಸ್ತು ಮಾಡಲು ಬೇಕಾದ ಎಲ್ಲಾ ವೆಚ್ಚಕ್ಕಾಗಿ ಕೊಟ್ಟರು.
12:13b.2KI.012.013 ಆದರೆ ಕರ್ತನ ಮನೆ ಗೋಸ್ಕರ ಬೆಳ್ಳಿಬಟ್ಟಲುಗಳನ್ನೂ ಕತ್ತರಿಗಳನ್ನೂ ಪಾತ್ರೆ ಗಳನ್ನೂ ತುತೂರಿಗಳನ್ನೂ ಬೆಳ್ಳಿ ಬಂಗಾರದ ಸಾಮಾನು ಗಳನ್ನೂ ಕರ್ತನ ಮನೆಗೆ ತಂದ
12:14b.2KI.012.014 ಹಣದಿಂದ ಮಾಡಿ ಸದೆ ಅವರು ಅದನ್ನು ಕೆಲಸದವರಿಗೆ ಕೊಟ್ಟು ಕರ್ತನ ಮನೆಯನ್ನು ದುರಸ್ತು ಮಾಡಿಸಿದರು.
12:15b.2KI.012.015 ಇದಲ್ಲದೆ ಅವರು ಕೆಲಸ ಮಾಡುವವರಿಗೆ ಕೊಡುವದಕ್ಕೆ ಯಾರ ಕೈಯಲ್ಲಿ ಒಪ್ಪಿಸಿದ್ದರೋ ಅವರಿಂದ ಲೆಕ್ಕವನ್ನು ತೆಗೆದು ಕೊಳ್ಳಲಿಲ್ಲ.
12:16b.2KI.012.016 ಅವರು ನಂಬಿಗಸ್ತರಾಗಿ ಮಾಡಿದರು. ಆದರೆ ಅಪರಾಧದ ಹಣವನ್ನೂ ಪಾಪಪರಿಹಾರದ ಹಣವನ್ನೂ ಕರ್ತನ ಮನೆಗೆ ತಕ್ಕೊಂಡು ಬರಲಿಲ್ಲ; ಅದು ಯಾಜಕರದಾಗಿತ್ತು.
12:17b.2KI.012.017 ಅರಾಮ್ಯರ ಅರಸನಾದ ಹಜಾಯೇಲನು ಹೋಗಿ ಗತ್ ಊರಿನ ಮೇಲೆ ಯುದ್ಧಮಾಡಿ ಅದನ್ನು ವಶಪಡಿಸಿಕೊಂಡನು. ಹಜಾಯೇಲನು ಯೆರೂಸಲೇ ಮಿಗೆ ಹೋಗಲು ತನ್ನ ಮುಖವನ್ನು ತಿರುಗಿಸಿದನು.
12:18b.2KI.012.018 ಆಗ ಯೆಹೂದದ ಅರಸನಾದ ಯೆಹೋವಾಷನೂ ಯೆಹೂದದ ಅರಸುಗಳಾಗಿರುವ ತನ್ನ ತಂದೆಗಳಾದ ಯೆಹೋಷಾಫಾಟನೂ ಯೆಹೋರಾಮನೂ ಅಹ ಜ್ಯನೂ ಅರ್ಪಿಸಿದ ಎಲ್ಲಾ ಪ್ರತಿಷ್ಠಿತವಾದವುಗಳನ್ನೂ ತಾನು ಪರಿಶುದ್ಧ ಮಾಡಿದವುಗಳನ್ನೂ ಕರ್ತನ ಮನೆಯ ಬೊಕ್ಕಸದಲ್ಲಿಯೂ ಅರಸನ ಮನೆಯಲ್ಲಿಯೂ ಸಿಕ್ಕಿದ ಸಕಲ ಬಂಗಾರವನ್ನೂ ತಕ್ಕೊಂಡು ಅರಾಮ್ಯರ ಅರಸ ನಾದ ಹಜಾಯೇಲನಿಗೆ ಕಳುಹಿಸಿದನು. ಆಗ ಅವನು ಯೆರೂಸಲೇಮನ್ನು ಬಿಟ್ಟುಹೋದನು.
12:19b.2KI.012.019 ಯೆಹೋವಾಷನ ಇತರ ಕಾರ್ಯಗಳೂ ಅವನು ಮಾಡಿದ್ದೆಲ್ಲವೂ ಯೆಹೂದದ ಅರಸುಗಳ ವೃತಾಂತ ಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
12:20b.2KI.012.020 ಆದರೆ ಅವನ ಸೇವಕರು ಎದ್ದು ಒಳಸಂಚುಮಾಡಿ ಸಿಲ್ಲಾಗೆ ಇಳಿದು ಹೋಗುವ ಮಾರ್ಗವಾದ ಮಿಲ್ಲೋವು ಎಂಬ ಮನೆಯಲ್ಲಿ ಯೆಹೋವಾಷನನ್ನು ಕೊಂದುಹಾಕಿದರು.ಅವನ ಸೇವಕರಾದ ಶಿಮೆಯಾತನ ಮಗನಾದ ಯೊಜಾಕಾರನೂ, ಶೋಮೇರನ ಮಗನಾದ ಯೆಹೋ ಜಾಬಾದನೂ ಅವನನ್ನು ಹೊಡೆದದ್ದರಿಂದ ಅವನು ಸತ್ತುಹೋದನು. ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಅಮಚ್ಯನು ಅವನಿಗೆ ಬದಲಾಗಿ ಅರಸನಾದನು.
12:21b.2KI.012.021 ಅವನ ಸೇವಕರಾದ ಶಿಮೆಯಾತನ ಮಗನಾದ ಯೊಜಾಕಾರನೂ, ಶೋಮೇರನ ಮಗನಾದ ಯೆಹೋ ಜಾಬಾದನೂ ಅವನನ್ನು ಹೊಡೆದದ್ದರಿಂದ ಅವನು ಸತ್ತುಹೋದನು. ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಅಮಚ್ಯನು ಅವನಿಗೆ ಬದಲಾಗಿ ಅರಸನಾದನು.
13
13:1b.2KI.013.001 ಯೆಹೂದದ ಅರಸನಾಗಿರುವ ಅಹಜ್ಯನಮಗನಾದ ಯೆಹೋವಾಷನ ಇಪ್ಪತ್ತ ಮೂರನೇ ವರುಷದಲ್ಲಿ ಯೇಹುವಿನ ಮಗನಾದ ಯೆಹೋವಾಹಾಜನು ಸಮಾರ್ಯದಲ್ಲಿ ಇಸ್ರಾಯೇಲ್ಯರ ಅರಸನಾಗಿ ಹದಿನೇಳು ವರುಷ ಆಳಿದನು.
13:2b.2KI.013.002 ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ಬಿಟ್ಟುಬಿಡದೆ ಅವುಗಳನ್ನು ಹಿಂಬಾಲಿಸಿದನು.
13:3b.2KI.013.003 ಆದದ ರಿಂದ ಕರ್ತನು ಇಸ್ರಾಯೇಲಿನ ಮೇಲೆ ಕೋಪಿಸಿ ಕೊಂಡು ಅವರನ್ನು ಅರಾಮ್ಯರ ಅರಸನಾದ ಹಜಾ ಯೇಲನ ಕೈಯಲ್ಲಿಯೂ ಹಜಾಯೇಲನ ಮಗನಾದ ಬೆನ್ಹದದನ ಕೈಯಲ್ಲಿಯೂ ಎಲ್ಲಾ ದಿವಸಗಳಲ್ಲಿ ಒಪ್ಪಿಸಿ ಕೊಟ್ಟನು.
13:4b.2KI.013.004 ಆದರೆ ಯೆಹೋವಾಹಾಜನು ಕರ್ತನನ್ನು ಬೇಡಿಕೊಂಡದ್ದರಿಂದ ಕರ್ತನು ಅವನ ಮೊರೆಯನ್ನು ಕೇಳಿದನು. ಯಾಕಂದರೆ ಅರಾಮ್ಯರ ಅರಸನು ಅವರನ್ನು ಬಾಧೆಪಡಿಸಿದ ಇಸ್ರಾಯೇಲಿನ ಬಾಧೆಯನ್ನು ಅವನು ಲಕ್ಷಿಸಿದನು.
13:5b.2KI.013.005 ಕರ್ತನು ಇಸ್ರಾಯೇಲಿಗೆ ಒಬ್ಬ ರಕ್ಷಕ ನನ್ನು ಕೊಟ್ಟಿದ್ದರಿಂದ ಅವರು ಅರಾಮ್ಯರ ಕೈಯಿಂದ ತಪ್ಪಿಸಿಕೊಂಡು ಹೋದರು. ಇಸ್ರಾಯೇಲ್ ಮಕ್ಕಳು ಮುಂಚಿನ ಹಾಗೆ ತಮ್ಮ ಡೇರೆಗಳಲ್ಲಿ ವಾಸವಾಗಿದ್ದರು.
13:6b.2KI.013.006 ಆದರೆ ಅವರು ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಮನೆಯ ಪಾಪ ಗಳನ್ನು ಬಿಟ್ಟು ಬಿಡದೆ ಅವುಗಳಲ್ಲೇ ನಡೆದರು. ಇದಲ್ಲದೆ ಸಮಾರ್ಯದಲ್ಲಿ ತೋಪು ನೆಲೆಯಾಗಿತ್ತು.
13:7b.2KI.013.007 ಆದರೂ ಯೆಹೋವಾಹಾಜನಿಗೆ ಐವತ್ತು ಕುದುರೆ ರಾಹುತ ರನ್ನೂ ಹತ್ತು ರಥಗಳನ್ನೂ ಹತ್ತು ಸಾವಿರ ಕಾಲಾಳು ಗಳನ್ನೂ ಹೊರತು ಜನರಲ್ಲಿ ಏನೂ ಬಿಡಲಿಲ್ಲ. ಯಾಕಂದರೆ ಅರಾಮ್ಯರ ಅರಸನು ಅವರನ್ನು ಸಂಹ ರಿಸಿ ತುಳಿಯಲ್ಪಟ್ಟ ಧೂಳಿನ ಹಾಗೆ ಮಾಡಿದ್ದನು.
13:8b.2KI.013.008 ಯೆಹೋವಾಹಾಜನ ಇತರ ಕಾರ್ಯಗಳೂ ಅವನು ಮಾಡಿದ್ದೆಲ್ಲವೂ ಅವನ ಪರಾಕ್ರಮವೂ ಇಸ್ರಾಯೇ ಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯ ಲ್ಪಡಲಿಲ್ಲವೋ?
13:9b.2KI.013.009 ಯೆಹೋವಾಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನನ್ನು ಸಮಾರ್ಯದಲ್ಲಿ ಹೂಣಿಟ್ಟರು; ಅವನ ಮಗನಾದ ಯೋವಾಷನು ಅವನಿಗೆ ಬದಲಾಗಿ ಅರಸನಾದನು.
13:10b.2KI.013.010 ಯೆಹೂದದ ಅರಸನಾದ ಯೆಹೋವಾಷನ ಆಳ್ವಿಕೆಯ ಮೂವತ್ತೇಳನೇ ವರುಷದಲ್ಲಿ ಯೆಹೋವಾ ಹಾಜನ ಮಗನಾದ ಯೋವಾಷನು ಸಮಾರ್ಯ ದಲ್ಲಿ ಇಸ್ರಾಯೇಲ್ಯರ ಅರಸನಾಗಿ ಹದಿನಾರು ವರುಷ ಆಳಿದನು.
13:11b.2KI.013.011 ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿ ಸಿದ ನೆಬಾಟನ ಮಗನಾದ ಯಾರೊಬ್ಬಾಮನ ಎಲ್ಲಾ ಪಾಪಗಳನ್ನು ತೊರೆದುಬಿಡದೆ ಅವುಗಳಲ್ಲೇ ನಡೆದನು.
13:12b.2KI.013.012 ಯೆಹೋವಾಷನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಅವನು ಯೆಹೂದದ ಅರಸನಾದ ಅಮಚ್ಯನ ಸಂಗಡ ಯುದ್ಧಮಾಡಿದ ಅವನ ಪರಾ ಕ್ರಮವೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
13:13b.2KI.013.013 ಯೆಹೋವಾ ಷನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಸಮಾರ್ಯ ದಲ್ಲಿ ಇಸ್ರಾಯೇಲಿನ ಅರಸುಗಳ ಸ್ಮಶಾನ ಭೂಮಿಯಲ್ಲಿ ಅವನನ್ನು ಹೂಣಿಟ್ಟರು. ಯಾರೊಬ್ಬಾಮನು ಅವನ ಸಿಂಹಾಸನದ ಮೇಲೆ ಕುಳಿತುಕೊಂಡನು.
13:14b.2KI.013.014 ಆಗ ಎಲೀಷನು ಮರಣಕರವಾದ ವ್ಯಾಧಿ ಯಿಂದ ಬಿದ್ದು ಸತ್ತಾಗ ಇಸ್ರಾಯೇಲಿನ ಅರಸನಾದ ಯೋವಾಷನು ಅವನ ಬಳಿಗೆ ಬಂದು ಅವನ ಮುಂದೆ ಬಿದ್ದು ಅತ್ತು ಅವನಿಗೆ--ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲಿನ ರಥವೂ ಅದರ ಕುದುರೆ ರಾಹುತನೂ ಆದವನೇ ಅಂದನು.
13:15b.2KI.013.015 ಆಗ ಎಲೀಷನು ಅವನಿಗೆ--ಬಿಲ್ಲನ್ನೂ ಬಾಣಗಳನ್ನೂ ತಕ್ಕೋ ಅಂದನು.
13:16b.2KI.013.016 ಅವನು ಬಿಲ್ಲು ಬಾಣಗಳನ್ನು ತಕ್ಕೊಂಡನು. ಅವನು ಇಸ್ರಾಯೇಲಿನ ಅರಸನಿಗೆ--ನಿನ್ನ ಕೈಯನ್ನು ಬಿಲ್ಲಿನ ಮೇಲೆ ಇರಿಸು ಅಂದನು.
13:17b.2KI.013.017 ಅವನು ತನ್ನ ಕೈಯನ್ನು ಇರಿಸಿದನು. ಎಲೀಷನು ತನ್ನ ಕೈಗಳನ್ನು ಅರಸನ ಕೈಗಳ ಮೇಲೆ ಇಟ್ಟನು. ಆಗ ಅವನು--ಮೂಡಲಲ್ಲಿರುವ ಕಿಟಕಿಯನ್ನು ತೆರೆ ಅಂದನು. ಅವನು ತೆರೆದನು. ಎಲೀಷನು--ಎಸೆ ಅಂದನು. ಅವನು ಎಸೆದನು. ಇದು ಕರ್ತನ ರಕ್ಷಣೆಯ ಬಾಣ; ಅರಾಮ್ಯರಿಂದ ತಪ್ಪಿಸುವ ರಕ್ಷಣೆಯ ಬಾಣವೇ, ಏನಂದರೆ ಅಫೇಕದಲ್ಲಿ ಅರಾಮ್ಯರನ್ನು ನಾಶಮಾಡುವ ವರೆಗೂ ಅವರನ್ನು ಹೊಡೆ ಯುವಿ ಅಂದನು.
13:18b.2KI.013.018 ಅವನು--ಬಾಣಗಳನ್ನು ತಕ್ಕೋ ಅಂದನು. ಅವನು ತಕ್ಕೊಂಡನು. ಅವನು ಇಸ್ರಾ ಯೇಲಿನ ಅರಸನಿಗೆ -- ನೆಲದ ಮೇಲೆ ಹೊಡೆ ಅಂದನು.
13:19b.2KI.013.019 ಆಗ ಅವನು ಮೂರು ಸಾರಿ ಹೊಡೆದು ನಿಂತನು. ಆದರೆ ದೇವರ ಮನುಷ್ಯನು ಅವನ ಮೇಲೆ ರೌದ್ರವುಳ್ಳವನಾಗಿ--ನೀನು ಐದಾರು ಸಾರಿ ಹೊಡೆ ಯಬೇಕಾಗಿತ್ತು; ಆಗ ಅರಾಮ್ಯರನ್ನು ನಾಶಮಾಡುವ ವರೆಗೂ ಹೊಡೆಯುತ್ತಿದ್ದಿ; ಆದರೆ ಈಗ ಅರಾಮ್ಯರನ್ನು ಮೂರು ಸಾರಿ ಹೊಡೆಯುವಿ ಅಂದನು.
13:20b.2KI.013.020 ಎಲೀಷನು ಸತ್ತ ತರುವಾಯ ಅವನನ್ನು ಹೂಣಿ ಟ್ಟರು. ವರುಷದ ಆರಂಭದಲ್ಲಿ ಮೋವಾಬ್ಯರ ದಂಡು ಗಳು ದೇಶದಲ್ಲಿ ಪ್ರವೇಶಿಸಿದವು.
13:21b.2KI.013.021 ಆಗ ಏನಾಯಿ ತಂದರೆ, ಅವರು ಒಬ್ಬ ಮನುಷ್ಯನನ್ನು ಹೂಣಿಡಲು ಹೋಗುವಾಗ ಇಗೋ, ದಂಡನ್ನು ಕಂಡು ಆ ಮನುಷ್ಯ ನನ್ನು ಎಲೀಷನ ಸಮಾಧಿಯಲ್ಲಿ ಬಿಸಾಡಿದರು. ಸತ್ತ ಮನುಷ್ಯನು ಅದರಲ್ಲಿ ಬಿದ್ದಾಗ ಎಲೀಷನ ಎಲುಬು ಗಳಿಗೆ ತಗುಲಿ ಜೀವ ಉಂಟಾದವನಾಗಿ ತನ್ನ ಕಾಲೂರಿ ಎದ್ದು ನಿಂತನು.
13:22b.2KI.013.022 ಯೆಹೋವಾಹಾಜನ ದಿವಸಗಳಲ್ಲೆಲ್ಲಾ ಅರಾ ಮ್ಯರ ಅರಸನಾದ ಹಜಾಯೇಲನು ಇಸ್ರಾಯೇಲನ್ನು ಬಾಧೆಪಡಿಸಿದನು.
13:23b.2KI.013.023 ಆದರೆ ಕರ್ತನು ಅಬ್ರಹಾಮನ ಇಸಾಕನ ಯಾಕೋಬನ ಸಂಗಡ ಒಡಂಬಡಿಕೆಯನ್ನು ಮಾಡಿದ್ದರಿಂದ ಅವರಿಗೆ ದಯಮಾಡಿ ಅವರ ಮೇಲೆ ಕೃಪೆ ತೋರಿಸಿ ಅವರ ಕಡೆಗೆ ತಿರುಗಿದನು. ಇನ್ನೂ ಅವರನ್ನು ನಾಶ ಮಾಡಲು ಅವರನ್ನು ತನ್ನಿಂದ ತೊರೆದು ಬಿಡಲು ಮನಸ್ಸಾಗಲಿಲ್ಲ, ಅವರನ್ನು ತನ್ನ ಸಮ್ಮುಖದಿಂದ ಹೊರಡಿಸಲೂ ಇಲ್ಲ.
13:24b.2KI.013.024 ಹೀಗೆ ಅರಾಮ್ಯರ ಅರಸ ನಾದ ಹಜಾಯೇಲನು ಸತ್ತನು; ಅವನ ಮಗನಾದ ಬೆನ್ಹದದನು ಅವನಿಗೆ ಬದಲಾಗಿ ಅರಸನಾದನು.ಆಗ ಯೆಹೋವಾಹಾಜನ ಮಗನಾದ ಯೋವಾ ಷನು ಯುದ್ಧದಲ್ಲಿ ತನ್ನ ತಂದೆಯಾದ ಯೆಹೋ ವಾಹಾಜನ ಕೈಯಿಂದ ಹಜಾಯೇಲನು ತಕ್ಕೊಂಡಿದ್ದ ಪಟ್ಟಣಗಳನ್ನು ಅವನ ಮಗನಾದ ಬೆನ್ಹದದನ ಕೈ ಯಿಂದ ತಿರಿಗಿ ತಕ್ಕೊಂಡನು. ಯೋವಾಷನು ಅವನನ್ನು ಮೂರು ಸಾರಿ ಹೊಡೆದು ಇಸ್ರಾಯೇಲಿನ ಪಟ್ಟಣ ಗಳನ್ನು ತಿರಿಗಿ ತಕ್ಕೊಂಡನು.
13:25b.2KI.013.025 ಆಗ ಯೆಹೋವಾಹಾಜನ ಮಗನಾದ ಯೋವಾ ಷನು ಯುದ್ಧದಲ್ಲಿ ತನ್ನ ತಂದೆಯಾದ ಯೆಹೋ ವಾಹಾಜನ ಕೈಯಿಂದ ಹಜಾಯೇಲನು ತಕ್ಕೊಂಡಿದ್ದ ಪಟ್ಟಣಗಳನ್ನು ಅವನ ಮಗನಾದ ಬೆನ್ಹದದನ ಕೈ ಯಿಂದ ತಿರಿಗಿ ತಕ್ಕೊಂಡನು. ಯೋವಾಷನು ಅವನನ್ನು ಮೂರು ಸಾರಿ ಹೊಡೆದು ಇಸ್ರಾಯೇಲಿನ ಪಟ್ಟಣ ಗಳನ್ನು ತಿರಿಗಿ ತಕ್ಕೊಂಡನು.
14
14:1b.2KI.014.001 ಇಸ್ರಾಯೇಲಿನ ಅರಸನಾಗಿರುವ ಯೆಹೋ ವಾಹಾಜನ ಮಗನಾದ ಯೋವಾಷನ ಆಳ್ವಿಕೆಯ ಎರಡನೇ ವರುಷದಲ್ಲಿ ಯೆಹೂದದ ಅರಸ ನಾಗಿರುವ ಯೆಹೋವಾಷನ ಮಗನಾದ ಅಮಚ್ಯನು ಅರಸನಾದನು.
14:2b.2KI.014.002 ಅವನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಇಪ್ಪತ್ತೊಂಭತ್ತು ವರುಷ ಯೆರೂಸಲೇಮಿನಲ್ಲಿ ಆಳಿದನು. ಅವನ ತಾಯಿಯು ಯೆರೂಸಲೇಮಿನವಳಾದ ಯೆಹೋವ ದ್ದೀನ್.
14:3b.2KI.014.003 ಅವನು ಕರ್ತನ ದೃಷ್ಟಿಗೆ ಒಳ್ಳೇದನ್ನು ಮಾಡಿ ದನು; ಆದರೆ ತನ್ನ ಪಿತೃವಾದ ದಾವೀದನ ಹಾಗಲ್ಲ; ತನ್ನ ತಂದೆಯಾದ ಯೆಹೋವಾಷನು ಮಾಡಿದ ಹಾಗೆ ಎಲ್ಲವನ್ನು ಮಾಡಿದನು.
14:4b.2KI.014.004 ಆದರೆ ಉನ್ನತ ಸ್ಥಳಗಳನ್ನು ತೆಗೆದು ಹಾಕಲಿಲ್ಲ; ಜನರು ಇನ್ನೂ ಉನ್ನತ ಸ್ಥಳಗಳ ಮೇಲೆ ಬಲಿಯರ್ಪಿಸಿ ಧೂಪವನ್ನು ಸುಡುತ್ತಿದ್ದರು.
14:5b.2KI.014.005 ರಾಜ್ಯವು ತನ್ನ ಕೈಯಲ್ಲಿ ಸ್ಥಿರಪಟ್ಟ ತರುವಾಯ ಅರಸ ನಾಗಿದ್ದ ತನ್ನ ತಂದೆಯನ್ನು ಕೊಂದ ತನ್ನ ಸೇವಕರನ್ನು ಕೊಂದುಹಾಕಿದನು.
14:6b.2KI.014.006 ಆದರೆ ತಂದೆಗಳು ತಮ್ಮ ಮಕ್ಕಳ ನಿಮಿತ್ತ ಸಾಯಬಾರದು; ಮಕ್ಕಳು ತಮ್ಮ ತಂದೆಗಳ ನಿಮಿತ್ತ ಸಾಯಬಾರದು; ಪ್ರತಿ ಮನುಷ್ಯನು ತನ್ನ ಪಾಪಕ್ಕೋಸ್ಕರ ಸಾಯಬೇಕೆಂದು ಕರ್ತನು ಆಜ್ಞಾಪಿಸಿದ ಹಾಗೆ ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ಹೊಡೆದವರ ಮಕ್ಕಳನ್ನು ಅವನು ಸಾಯಿಸ ಲಿಲ್ಲ.
14:7b.2KI.014.007 ಅವನು ಉಪ್ಪಿನ ತಗ್ಗಿನಲ್ಲಿ ಎದೋಮ್ಯರಾದ ಹತ್ತು ಸಾವಿರ ಜನರನ್ನು ಹೊಡೆದು ಯುದ್ಧದಲ್ಲಿ ಸೆಲವನ್ನು ವಶಪಡಿಸಿಕೊಂಡು ಈ ದಿವಸದ ವರೆಗೂ ಯೊಕ್ತೆಯೇಲ್ ಎಂಬ ಹೆಸರಿಟ್ಟನು.
14:8b.2KI.014.008 ಆಗ ಅಮಚ್ಯನು ಇಸ್ರಾಯೇಲ್ಯರ ಅರಸನಾದ ಯೇಹುವಿನ ಮಗನಾಗಿರುವ ಯೆಹೋವಾಹಾಜನ ಮಗನಾದ ಯೋವಾಷನ ಬಳಿಗೆ ಸೇವಕರನ್ನು ಕಳು ಹಿಸಿ--ನಾವು ಒಬ್ಬರ ಮುಖವನ್ನು ಒಬ್ಬರು ನೋಡುವ ಹಾಗೆ ಬಾ ಎಂದು ಹೇಳಿದನು.
14:9b.2KI.014.009 ಆದರೆ ಇಸ್ರಾಯೇಲಿನ ಅರಸನಾದ ಯೆಹೋವಾಷನು ಯೆಹೂದದ ಅರಸ ನಾಗಿರುವ ಅಮಚ್ಯನಿಗೆ ಹೇಳಿ ಕಳುಹಿಸಿದ್ದೇನಂದರೆಲೆಬನೋನಿನಲ್ಲಿದ್ದ ಮುಳ್ಳು ಗಿಡವು ಲೆಬನೋನಿನ ಲ್ಲಿರುವ ದೇವದಾರಿಗೆ -- ನನ್ನ ಮಗನಿಗೆ ಹೆಂಡತಿ ಯಾಗಿರಲು ನೀನು ನಿನ್ನ ಮಗಳನ್ನು ಕೊಡು ಎಂದು ಹೇಳಿ ಕಳುಹಿಸಿತು. ಆದರೆ ಲೆಬನೋನಿನಲ್ಲಿದ್ದ ಅಡವಿಯ ಮೃಗವು ಹಾದು ಹೋಗುತ್ತಿರುವಾಗ ಆ ಮುಳ್ಳು ಗಿಡವನ್ನು ತುಳಿಯಿತು.
14:10b.2KI.014.010 ನೀನು ಎದೋಮ್ಯ ರನ್ನು ಹೊಡೆದೇ ಹೊಡೆದದ್ದರಿಂದ ನಿನ್ನ ಹೃದಯವು ನಿನ್ನನ್ನು ಹೆಚ್ಚಿಸುವಂತೆ ಮಾಡಿತು. ಹೆಚ್ಚಳಪಡು; ಮನೆಯಲ್ಲಿ ಕಾದಿರು; ನಿನ್ನ ಕೇಡಿಗಾಗಿ ನೀನು ಯಾಕೆ ಜಗಳವಾಡಬೇಕು? ನೀನೂ ನಿನ್ನ ಸಂಗಡ ಯೆಹೂ ದವೂ ಬಿದ್ದು ಹೋಗುವಿರಲ್ಲಾ ಅಂದನು. ಆದರೆ ಅಮಚ್ಯನು ಕೇಳದೆ ಹೋದನು.
14:11b.2KI.014.011 ಆದದರಿಂದ ಇಸ್ರಾಯೇಲ್ಯರ ಅರಸನಾದ ಯೋವಾಷನು ಹೊರ ಟನು. ಅವನೂ ಯೆಹೂದದ ಅರಸನಾದ ಅಮ ಚ್ಯನೂ ಯೆಹೂದಕ್ಕೆ ಸೇರಿದ ಬೇತ್ಷೆಮೆಷಿನ ಬಳಿಯಲ್ಲಿ ಒಬ್ಬರಿಗೊಬ್ಬರು ಎದುರುಗೊಂಡರು.
14:12b.2KI.014.012 ಯೆಹೂದ್ಯರು ಇಸ್ರಾಯೇಲ್ಯರ ಮುಂದೆ ಸೋತು ಹೋದದ್ದರಿಂದ ಅವರೆಲ್ಲರೂ ತಮ್ಮ ತಮ್ಮ ಡೇರೆಗಳಿಗೆ ಓಡಿಹೋದರು.
14:13b.2KI.014.013 ಆಗ ಇಸ್ರಾಯೇಲ್ಯರ ಅರಸನಾದ ಯೋವಾಷನು ಅಹಜ್ಯನ ಮಗನಾದ ಯೆಹೋವಾಷನ ಮಗನಾಗಿ ರುವ ಯೆಹೂದದ ಅರಸನಾದ ಅಮಚ್ಯನನ್ನು ಬೇತ್ಷೆ ಮೆಷಿನ ಬಳಿಯಲ್ಲಿ ಹಿಡುಕೊಂಡು ಯೆರೂಸಲೇಮಿಗೆ ಬಂದು ಯೆರೂಸಲೇಮಿನ ಎಫ್ರಾಯಾಮಿನ ಬಾಗಲು ಮೊದಲುಗೊಂಡು ಮೂಲೆಯ ಬಾಗಲ ವರೆಗೂ ನಾನೂರು ಮೊಳ ಉದ್ದದ ಗೋಡೆಯನ್ನು ಕೆಡವಿಬಿಟ್ಟು
14:14b.2KI.014.014 ಕರ್ತನ ಆಲಯದಲ್ಲಿಯೂ ಅರಸನ ಮನೆಯ ಬೊಕ್ಕಸಗಳಲ್ಲಿಯೂ ಸಿಕ್ಕಿದ ಸಕಲ ಬಂಗಾರವನ್ನೂ ಬೆಳ್ಳಿಯನ್ನೂ ಎಲ್ಲಾ ಸಾಮಾನುಗಳನ್ನೂ ಹೊಣೆಗಾರ ರನ್ನೂ ತೆಗೆದುಕೊಂಡು ಸಮಾರ್ಯಕ್ಕೆ ತಿರಿಗಿ ಹೋದನು.
14:15b.2KI.014.015 ಯೋವಾಷನು ಮಾಡಿದ ಇತರ ಕ್ರಿಯೆ ಗಳೂ ಅವನ ಪರಾಕ್ರಮವೂ ಅವನು ಯೆಹೂದ ಅರಸನಾದ ಅಮಚ್ಯನ ಸಂಗಡ ಯುದ್ಧಮಾಡಿದ್ದೂ ಇಸ್ರಾಯೇಲ್ಯರ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
14:16b.2KI.014.016 ಯೋವಾಷನು ತನ್ನ ಪಿತೃ ಗಳ ಸಂಗಡ ನಿದ್ರಿಸಿದನು; ಅವನನ್ನು ಸಮಾರ್ಯ ದಲ್ಲಿ ಇಸ್ರಾಯೇಲಿನ ಅರಸುಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಯಾರೊಬ್ಬಾಮನು ಅವನಿಗೆ ಬದಲಾಗಿ ಅರಸನಾದನು.
14:17b.2KI.014.017 ಆದರೆ ಇಸ್ರಾಯೇಲಿನ ಅರಸನಾದ ಯೆಹೋ ವಾಹಾಜನ ಮಗನಾಗಿರುವ ಯೋವಾಷನು ಸತ್ತ ತರುವಾಯ ಯೆಹೂದದ ಅರಸನಾದ ಯೆಹೋ ವಾಷನ ಮಗನಾಗಿರುವ ಅಮಚ್ಯನು ಹದಿನೈದು ವರುಷ ಬದುಕಿದನು.
14:18b.2KI.014.018 ಅಮಚ್ಯನ ಇತರ ಕ್ರಿಯೆಗಳು ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
14:19b.2KI.014.019 ಅವರು ಯೆರೂಸಲೇಮಿ ನಲ್ಲಿ ಅವನ ಮೇಲೆ ಒಳಸಂಚು ಮಾಡಿದ್ದರಿಂದ ಅವನು ಲಾಕೀಷಿಗೆ ಓಡಿಹೋದನು. ಆದರೆ ಅವರು ಅವನ ಹಿಂದೆ ಲಾಕೀಷಿಗೆ ಜನರನ್ನು ಕಳುಹಿಸಿ ಅಲ್ಲಿ ಅವನನ್ನು ಕೊಂದುಹಾಕಿದರು.
14:20b.2KI.014.020 ಅವನ ಶವವನ್ನು ಕುದುರೆಗಳ ಮೇಲೆ ತರಲ್ಪಟ್ಟು ದಾವೀದನ ಪಟ್ಟಣವಾದ ಯೆರೂ ಸಲೇಮಿನಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು.
14:21b.2KI.014.021 ಯೆಹೂದದ ಜನರು ಹದಿನಾರು ವರುಷದವನಾದ ಅಜರ್ಯನನ್ನು ಅವನ ತಂದೆಯಾದ ಅಮಚ್ಯನಿಗೆ ಬದಲಾಗಿ ಅರಸನಾಗ ಮಾಡಿದರು.
14:22b.2KI.014.022 ಅರಸನು ತನ್ನ ಪಿತೃಗಳ ಸಂಗಡ ನಿದ್ರಿಸಿದ ತರು ವಾಯ ಇವನು ಏಲತನ್ನು ಕಟ್ಟಿಸಿ ಅದನ್ನು ಯೆಹೂದಕ್ಕೆ ತಿರಿಗಿ ಸೇರಿಸಿಕೊಂಡನು.
14:23b.2KI.014.023 ಯೆಹೂದದ ಅರಸನಾಗಿರುವ ಯೆಹೋವಾಷನ ಮಗನಾದ ಅಮಚ್ಯನ ಆಳ್ವಿಕೆಯ ಹದಿನೈದನೇ ವರು ಷದಲ್ಲಿ ಇಸ್ರಾಯೇಲಿನ ಅರಸನಾಗಿರುವ ಯೋವಾ ಷನ ಮಗನಾದ ಯಾರೊಬ್ಬಾಮನು ಅರಸನಾಗಿ ಸಮಾರ್ಯದಲ್ಲಿ ನಾಲ್ವತ್ತೊಂದು ವರುಷ ಆಳಿದನು.
14:24b.2KI.014.024 ಆದರೆ ಅವನು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು; ಇಸ್ರಾಯೇಲನ್ನು ಪಾಪ ಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನೆಲ್ಲಾ ಅವನು ತೊರೆದು ಬಿಡಲಿಲ್ಲ.
14:25b.2KI.014.025 ಇದ ಲ್ಲದೆ ಇಸ್ರಾಯೇಲಿನ ದೇವರಾದ ಕರ್ತನು ಗತ್‌ಹೇಫೆ ರಿನವನಾದ ಪ್ರವಾದಿಯಾಗಿರುವ ಅಮಿತ್ತೈನ ಮಗ ನಾದ ಯೋನನೆಂಬ ತನ್ನ ಸೇವಕನ ಮುಖಾಂತರ ಹೇಳಿದ ವಾಕ್ಯದ ಪ್ರಕಾರವೇ ಅವನು ಹಮಾತಿನ ಪ್ರವೇಶ ಮೊದಲುಗೊಂಡು ಬಯಲಿನ ಸಮುದ್ರದ ವರೆಗೂ ಇರುವ ಇಸ್ರಾಯೇಲಿನ ಮೇರೆಯನ್ನು ತಿರಿಗಿ ತಕ್ಕೊಂಡನು.
14:26b.2KI.014.026 ಇಸ್ರಾಯೇಲಿನ ಶ್ರಮೆಯು ಬಹಳ ಕಠಿಣವಾಗಿದೆ ಎಂದು ಕರ್ತನು ಕಂಡನು. ಯಾಕಂದರೆ ಮುಚ್ಚಲ್ಪಟ್ಟವನಾದರೂ ಬಿಡಲ್ಪಟ್ಟವನಾದರೂ ಇಸ್ರಾ ಯೇಲಿಗೆ ಸಹಾಯಕನಾದರೂ ಯಾವನೂ ಇರಲಿಲ್ಲ.
14:27b.2KI.014.027 ಇದಲ್ಲದೆ ಇಸ್ರಾಯೇಲಿನ ನಾಮವನ್ನು ಆಕಾಶದ ಕೆಳಗಿನಿಂದ ಅಳಿಸಿ ಬಿಡುವೆನೆಂದು ಕರ್ತನು ಹೇಳಿದ್ದಿಲ್ಲ; ಆದರೆ ಯೋವಾಷನ ಮಗನಾದ ಯಾರೊಬ್ಬಾಮನ ಕೈಯಿಂದ ಅವರನ್ನು ರಕ್ಷಿಸಿದನು.
14:28b.2KI.014.028 ಯಾರೊಬ್ಬಾಮನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಅವನ ಪರಾಕ್ರಮವೂ ಅವನ ಯುದ್ಧಗಳೂ ಯೆಹೂದಕ್ಕೆ ಸೇರಿದ ದಮಸ್ಕವನ್ನೂ ಹಮಾತನ್ನೂ ಇಸ್ರಾಯೇಲಿ ಗೋಸ್ಕರ ಹಿಂತಿರುಗಿ ತಕ್ಕೊಂಡದ್ದೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡ ಲಿಲ್ಲವೋ?ಯಾರೊಬ್ಬಾಮನು ಇಸ್ರಾಯೇಲಿನ ಅರಸುಗಳಾದ ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನ ಮಗನಾದ ಜೆಕರ್ಯ ಅವನಿಗೆ ಬದಲಾಗಿ ಅರಸನಾದನು.
14:29b.2KI.014.029 ಯಾರೊಬ್ಬಾಮನು ಇಸ್ರಾಯೇಲಿನ ಅರಸುಗಳಾದ ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನ ಮಗನಾದ ಜೆಕರ್ಯ ಅವನಿಗೆ ಬದಲಾಗಿ ಅರಸನಾದನು.
15
15:1b.2KI.015.001 ಇಸ್ರಾಯೇಲಿನ ಅರಸನಾದ ಯಾರೊ ಬ್ಬಾಮನ ಆಳ್ವಿಕೆಯ ಇಪ್ಪತ್ತೇಳನೇ ವರುಷ ದಲ್ಲಿ ಯೆಹೂದದ ಅರಸನಾಗಿರುವ ಅಮಚ್ಯನ ಮಗ ನಾದ ಅಜರ್ಯನು ಆಳಲು ಆರಂಭಿಸಿದನು.
15:2b.2KI.015.002 ಅವನು ಆಳಲು ಆರಂಭಿಸಿದಾಗ ಹದಿನಾರು ವರುಷದವ ನಾಗಿದ್ದು ಯೆರೂಸಲೇಮಿನಲ್ಲಿ ಐವತ್ತೆರಡು ವರುಷ ಆಳಿದನು. ಅವನ ತಾಯಿಯ ಹೆಸರು ಯೆಕೊಲ್ಯಳು; ಅವಳು ಯೆರೂಸಲೇಮಿನವಳು.
15:3b.2KI.015.003 ಅವನು ತನ್ನ ತಂದೆಯಾದ ಅಮಚ್ಯನು ಮಾಡಿದ ಎಲ್ಲಾದರ ಹಾಗೆ ಕರ್ತನ ಸನ್ನಿಧಿಯಲ್ಲಿ ಒಳ್ಳೆಯದನ್ನು ಮಾಡಿದನು.
15:4b.2KI.015.004 ಆದರೆ ಉನ್ನತ ಸ್ಥಳಗಳು ಕೆಡವಲ್ಪಡಲಿಲ್ಲ; ಜನರು ಇನ್ನೂ ಉನ್ನತ ಸ್ಥಳಗಳ ಮೇಲೆ ಬಲಿಗಳನ್ನು ಅರ್ಪಿಸಿ ಧೂಪವನ್ನು ಅರ್ಪಿಸುತ್ತಿದ್ದರು.
15:5b.2KI.015.005 ಕರ್ತನು ಅರಸನನ್ನು ಹೊಡೆದದ್ದರಿಂದ ಅವನು ತನ್ನ ಜೀವದಿಂದಿರು ವರೆಗೂ ಕುಷ್ಠರೋಗಿಯಾಗಿದ್ದು ಪ್ರತ್ಯೇಕವಾದ ಮನೆಯಲ್ಲಿ ವಾಸವಾಗಿದ್ದನು. ಅರಸನ ಮಗನಾದ ಯೋತಾಮನು ಮನೆ ಯಜಮಾನನಾಗಿದ್ದು ದೇಶದ ಜನರಿಗೆ ನ್ಯಾಯ ತೀರಿಸುತ್ತಿದ್ದನು.
15:6b.2KI.015.006 ಅಜರ್ಯನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
15:7b.2KI.015.007 ಅಜರ್ಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಯೋತಾಮನು ಅವನಿಗೆ ಬದಲಾಗಿ ಅರಸನಾದನು.
15:8b.2KI.015.008 ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೆಂಟನೇ ವರುಷದಲ್ಲಿ ಯಾರೊಬ್ಬಾಮನ ಮಗ ನಾದ ಜೆಕರ್ಯ ಇಸ್ರಾಯೇಲಿನ ಮೇಲೆ ಸಮಾರ್ಯ ದಲ್ಲಿ ಆರು ತಿಂಗಳು ಆಳಿದನು.
15:9b.2KI.015.009 ಅವನು ತನ್ನ ಪಿತೃಗಳು ಮಾಡಿದ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.
15:10b.2KI.015.010 ಆಗ ಯಾಬೇಷನ ಮಗನಾದ ಶಲ್ಲೂಮನು ಅವನ ಮೇಲೆ ಒಳಸಂಚು ಮಾಡಿ ಜನರ ಮುಂದೆ ಅವನನ್ನು ಹೊಡೆದು ಕೊಂದು ಹಾಕಿ ಅವನಿಗೆ ಬದಲಾಗಿ ಅರಸನಾದನು.
15:11b.2KI.015.011 ಇಗೋ, ಜೆಕರ್ಯನ ಇತರ ಕ್ರಿಯೆಗಳು ಇಸ್ರಾಯೇಲಿನ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
15:12b.2KI.015.012 ನಿನ್ನ ಕುಮಾರರು ನಾಲ್ಕನೇ ಸಂತತಿಯ ವರೆಗೂ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತಿರುವರು ಎಂದು ಕರ್ತನು ಯೇಹುವಿಗೆ ಹೇಳಿದ ವಾಕ್ಯವು ಇದೇ; ಹೀಗೆಯೇ ಆಯಿತು.
15:13b.2KI.015.013 ಯೆಹೂದದ ಅರಸನಾದ ಉಜ್ಜೀಯನ ಆಳ್ವಿಕೆಯ ಮೂವತ್ತೊಂಭತ್ತನೇ ವರುಷದಲ್ಲಿ ಯಾಬೇಷನ ಮಗ ನಾದ ಶಲ್ಲೂಮನು ಆಳಲು ಆರಂಭಿಸಿ ಸಮಾರ್ಯ ದಲ್ಲಿ ಒಂದು ತಿಂಗಳು ಆಳಿದನು.
15:14b.2KI.015.014 ಯಾಕಂದರೆ ಗಾದಿಯ ಮಗನಾದ ಮೆನಹೇಮನು ತಿರ್ಚದಿಂದ ಹೊರಟು ಹೋಗಿ ಸಮಾರ್ಯಕ್ಕೆ ಬಂದು ಸಮಾರ್ಯ ದಲ್ಲಿ ಯಾಬೇಷನ ಮಗನಾದ ಶಲ್ಲೂಮನನ್ನು ಹೊಡೆದು ಕೊಂದುಹಾಕಿ ಅವನಿಗೆ ಬದಲಾಗಿ ಅರಸ ನಾದನು.
15:15b.2KI.015.015 ಇಗೋ, ಶಲ್ಲೂಮನ ಇತರ ಕ್ರಿಯೆಗಳೂ ಅವನು ಮಾಡಿದ ಒಳಸಂಚೂ ಇಸ್ರಾಯೇಲಿನ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
15:16b.2KI.015.016 ಆಗ ಮೆನಹೇಮನು ತಿಪ್ಸಹನ್ನೂ ಅದರಲ್ಲಿ ಇದ್ದ ಎಲ್ಲರನ್ನೂ ತಿರ್ಚ ಮೊದಲುಗೊಂಡು ಅದರ ಮೇರೆಗಳನ್ನೂ ಹಾಳುಮಾಡಿದನು. ಅವರು ತಮ್ಮ ಬಾಗಲುಗಳನ್ನು ತನಗೆ ತೆರೆಯದೆ ಇದ್ದದರಿಂದ ಅವರನ್ನು ಹೊಡೆದನು; ಅದರಲ್ಲಿರುವ ಗರ್ಭಿಣಿಯರನ್ನೆಲ್ಲಾ ಸೀಳಿಸಿದನು.
15:17b.2KI.015.017 ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೊಂಭತ್ತನೇ ವರುಷದಲ್ಲಿ ಗಾದಿಯ ಮಗ ನಾದ ಮೆನಹೇಮನು ಇಸ್ರಾಯೇಲಿನ ಮೇಲೆ ಆಳ ಲಾರಂಭಿಸಿ ಸಮಾರ್ಯದಲ್ಲಿ ಹತ್ತು ವರುಷ ಆಳಿದನು.
15:18b.2KI.015.018 ಅವನು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು; ಅವನು ತನ್ನ ದಿವಸಗಳಲ್ಲೆಲ್ಲಾ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.
15:19b.2KI.015.019 ಆದರೆ ಅಶ್ಶೂರದ ಅರಸನಾದ ಪೂಲನು ದೇಶದ ಮೇಲೆ ಬಂದನು. ಆಗ ಮೆನಹೇಮನು ರಾಜ್ಯವನ್ನು ತನ್ನ ಕೈಯಲ್ಲಿ ಧೃಢಪಡಿಸಲು ಅವನ ಕೈ ತನ್ನ ಸಂಗಡ ಇರುವ ಹಾಗೆ ಪೂಲನಿಗೆ ಸಾವಿರ ಬೆಳ್ಳಿ ತಲಾಂತು ಗಳನ್ನು ಕೊಟ್ಟನು.
15:20b.2KI.015.020 ಮೆನಹೇಮನು ಈ ಹಣವನ್ನು ಇಸ್ರಾಯೇಲಿನವರಿಂದ ಬರಮಾಡಿದನು. ಹೇಗಂದರೆ, ಅಶ್ಶೂರದ ಅರಸನಿಗೆ ಕೊಡಲು ಎಲ್ಲಾ ಐಶ್ವರ್ಯವಂತ ರಿಂದ ತಲಾ ಐವತ್ತು ಬೆಳ್ಳಿ ಶೆಕೇಲುಗಳನ್ನು ತೆಗೆದು ಕೊಂಡನು. ಆದದರಿಂದ ಅಶ್ಶೂರದ ಅರಸನು ದೇಶ ದಲ್ಲಿ ನಿಲ್ಲದೆ ತಿರಿಗಿ ಹೋದನು.
15:21b.2KI.015.021 ಮೆನಹೇಮನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಇಸ್ರಾಯೇಲಿನ ಅರಸುಗಳ ವೃತ್ತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
15:22b.2KI.015.022 ಮೆನಹೇಮನು ತನ್ನ ಪಿತೃ ಗಳ ಸಂಗಡ ನಿದ್ರಿಸಿದನು; ಅವನ ಮಗನಾದ ಪೆಕ ಹನು ಅವನಿಗೆ ಬದಲಾಗಿ ಅರಸನಾದನು;
15:23b.2KI.015.023 ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತನೇ ವರುಷದಲ್ಲಿ ಮೆನಹೇಮನ ಮಗನಾದ ಪೆಕಹನು ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಎರಡು ವರುಷ ಆಳಿದನು.
15:24b.2KI.015.024 ಅವನು ಕರ್ತನ ಸಮ್ಮುಖ ದಲ್ಲಿ ಕೆಟ್ಟದ್ದನ್ನು ಮಾಡಿದನು; ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾ ದಂಥ ಯಾರೊಬ್ಬಾಮನ ಪಾಪಗಳನ್ನು ತೊರೆಯಲಿಲ್ಲ.
15:25b.2KI.015.025 ಆದರೆ ಅವನ ಅಧಿಪತಿಯಾದಂಥ, ರೆಮಲ್ಯನ ಮಗನಾದ ಪೆಕಹನು ಅವನ ಮೇಲೆ ಒಳಸಂಚು ಮಾಡಿ ಅರ್ಗೋಬನ್ನೂ ಅರ್ಯೇಯನ್ನೂ ಗಿಲ್ಯಾದಿನ ಜನರಲ್ಲಿ ಐವತ್ತು ಮಂದಿಯನ್ನೂ ತನ್ನ ಸಂಗಡ ಕೂಡಿಸಿ ಕೊಂಡು ಸಮಾರ್ಯದಲ್ಲಿ ಅರಸನಿಗಿದ್ದ ಅರಮನೆ ಯೊಳಗೆ ಅವನನ್ನು ಕೊಂದುಹಾಕಿ ಅವನಿಗೆ ಬದಲಾಗಿ ಅರಸನಾದನು.
15:26b.2KI.015.026 ಇಗೋ, ಪೆಕಹನ ಇತರ ಕ್ರಿಯೆ ಗಳೂ ಅವನು ಮಾಡಿದ್ದೆಲ್ಲವೂ ಇಸ್ರಾಯೇಲಿನ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
15:27b.2KI.015.027 ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತೆರಡನೇ ವರುಷದಲ್ಲಿ ರೆಮಲ್ಯನ ಮಗನಾದ ಪೆಕಹನು ಇಸ್ರಾಯೇಲಿನ ಮೇಲೆ ಸಮಾರ್ಯದಲ್ಲಿ ಆಳಲು ಆರಂಭಿಸಿ ಇಪ್ಪತ್ತು ವರುಷ ಆಳಿದನು.
15:28b.2KI.015.028 ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ದನು; ಅವನು ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.
15:29b.2KI.015.029 ಇಸ್ರಾಯೇಲಿನ ಅರಸನಾದ ಪೆಕಹನ ದಿವಸಗಳಲ್ಲಿ ಅಶ್ಶೂರದ ಅರಸ ನಾದ ತಿಗ್ಲತ್ಪಿಲೆಸೆರನು ಬಂದು ನೆಫ್ತಾಲಿಯ ದೇಶವಾದ ಇಯ್ಯೋನನ್ನೂ ಅಬೇಲ್ಬೆತ್ಮಾಕವನ್ನೂ ಯಾನೋಹ ವನ್ನೂ ಕೆದೆಷನ್ನೂ ಹಾಚೋರನ್ನೂ ಗಿಲ್ಯಾದನ್ನೂ ಗಲಿಲಾಯವನ್ನೂ ಹಿಡುಕೊಂಡು ಜನರನ್ನು ಸೆರೆಯಾಗಿ ಅಶ್ಯೂರಿಗೆ ಒಯ್ದನು.
15:30b.2KI.015.030 ಇದಲ್ಲದೆ ಉಜ್ಜೀಯನ ಮಗ ನಾದ ಯೋತಾಮನ ಇಪ್ಪತ್ತನೇ ವರುಷದಲ್ಲಿ ಏಲನ ಮಗನಾದ ಹೋಶೆಯನು ರೆಮಲ್ಯನ ಮಗನಾದ ಪೆಕಹನ ಮೇಲೆ ಒಳಸಂಚು ಮಾಡಿ ಅವನನ್ನು ಸಂಹರಿಸಿ ಅವನಿಗೆ ಬದಲಾಗಿ ಅರಸನಾದನು.
15:31b.2KI.015.031 ಇಗೋ, ಪೆಕಹನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
15:32b.2KI.015.032 ಇಸ್ರಾಯೇಲಿನ ಅರಸನಾದಂಥ, ರೆಮಲ್ಯನ ಮಗನಾದ, ಪೆಕಹನ ಆಳ್ವಿಕೆಯ ಎರಡನೇ ವರುಷದಲ್ಲಿ ಯೆಹೂದದ ಅರಸನಾದಂಥ, ಉಜ್ಜೀಯನ ಮಗ ನಾದ, ಯೋತಾಮನು ಆಳಲು ಆರಂಭಿಸಿದನು.
15:33b.2KI.015.033 ಅವನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷ ದವನಾಗಿದ್ದು ಯೆರೂಸಲೇಮಿನಲ್ಲಿ ಹದಿನಾರು ವರುಷ ಆಳಿದನು. ಅವನ ತಾಯಿಯು ಚಾದೋಕನ ಮಗಳಾ ಗಿದ್ದ ಯೆರೂಷಳು.
15:34b.2KI.015.034 ಅವನು ತನ್ನ ತಂದೆಯಾದ ಉಜ್ಜೀಯನು ಮಾಡಿದ ಪ್ರಕಾರವೇ ಮಾಡಿ ಕರ್ತನ ಸಮ್ಮುಖದಲ್ಲಿ ಒಳ್ಳೆಯದಾದದ್ದನ್ನು ಮಾಡಿದನು.
15:35b.2KI.015.035 ಇವನು ಕರ್ತನ ಮನೆಗೆ ಎತ್ತರವಾದ ಬಾಗಲನ್ನು ಕಟ್ಟಿಸಿದನು. ಆದರೆ ಉನ್ನತ ಸ್ಥಳಗಳು ತೆಗೆಯಲ್ಪಡಲಿಲ್ಲ; ಜನರು ಇನ್ನೂ ಉನ್ನತ ಸ್ಥಳಗಳ ಮೇಲೆ ಬಲಿಗಳನ್ನೂ ಧೂಪವನ್ನೂ ಅರ್ಪಿಸುತ್ತಿದ್ದರು.
15:36b.2KI.015.036 ಯೋತಾಮನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
15:37b.2KI.015.037 ಆ ದಿವಸಗಳಲ್ಲಿ ಕರ್ತನು ಅರಾ ಮ್ಯರ ಅರಸನಾದ ರೆಚೀನನನ್ನೂ ರೆಮಲ್ಯನ ಮಗನಾದ ಪೆಕಹನನ್ನೂ ಯೆಹೂದದ ಮೇಲೆ ಕಳುಹಿಸಲು ಆರಂಭಿ ಸಿದನು.ಯೋತಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು. ಅವನನ್ನು ಅವನ ತಂದೆಯಾದ ದಾವೀ ದನ ಪಟ್ಟಣದಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು. ಅವನ ಮಗನಾದ ಆಹಾಜನು ಅವನಿಗೆ ಬದಲಾಗಿ ಅರಸನಾದನು.
15:38b.2KI.015.038 ಯೋತಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು. ಅವನನ್ನು ಅವನ ತಂದೆಯಾದ ದಾವೀ ದನ ಪಟ್ಟಣದಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು. ಅವನ ಮಗನಾದ ಆಹಾಜನು ಅವನಿಗೆ ಬದಲಾಗಿ ಅರಸನಾದನು.
16
16:1b.2KI.016.001 ರೆಮಲ್ಯನ ಮಗನಾದ ಪೆಕಹನ ಆಳ್ವಿಕೆಯ ಹದಿನೇಳನೇ ವರುಷದಲ್ಲಿ ಯೆಹೂದದ ಅರಸನಾಗಿರುವ ಯೋತಾಮನ ಮಗನಾದ ಆಹಾಜನು ಆಳಲು ಆರಂಭಿಸಿದನು.
16:2b.2KI.016.002 ಆಹಾಜನು ಆಳಲು ಆರಂಭಿ ಸಿದಾಗ ಇಪ್ಪತ್ತು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಹದಿನಾರು ವರುಷ ಆಳಿದನು.
16:3b.2KI.016.003 ಅವನು ತನ್ನ ತಂದೆಯಾದ ದಾವೀದನ ಹಾಗೆ ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಒಳ್ಳೇಯದನ್ನು ಮಾಡದೆ ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು. ಇದಲ್ಲದೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯಜನಾಂಗಗಳ ಅಸಹ್ಯವಾದವುಗಳ ಪ್ರಕಾರ ಅವನು ತನ್ನ ಮಗನನ್ನು ಬೆಂಕಿ ತುಳಿಯ ಮಾಡಿದನು.
16:4b.2KI.016.004 ಇದಲ್ಲದೆ ಅವನು ಉನ್ನತ ಸ್ಥಳಗಳ ಮೇಲೆಯೂ ಬೆಟ್ಟಗಳ ಮೇಲೆಯೂ ಹಸುರಾದ ಎಲ್ಲಾ ಮರಗಳ ಕೆಳಗೂ ಬಲಿಗಳನ್ನೂ ಧೂಪವನ್ನೂ ಸಮರ್ಪಿಸಿದನು.
16:5b.2KI.016.005 ಅವನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀ ನನೂ ಇಸ್ರಾಯೇಲಿನ ಅರಸನಾದಂಥ ರೆಮಲ್ಯನ ಮಗನಾದ ಪೆಕಹನೂ ಯುದ್ಧಮಾಡಲು ಯೆರೂಸ ಲೇಮಿಗೆ ಬಂದು ಆಹಾಜನನ್ನು ಮುತ್ತಿಗೆ ಹಾಕಿದರು; ಆದರೆ ಅವನನ್ನು ಜಯಿಸಲಾರದೆ ಹೋದರು.
16:6b.2KI.016.006 ಅದೇ ವೇಳೆಯಲ್ಲಿ ಅರಾಮ್ಯರ ಅರಸನಾದ ರೆಚೀನನು ಏಲ ತನ್ನು ಅರಾಮಿಗೆ ತಿರಿಗಿ ಸೇರಿಸಿಕೊಂಡು ಏಲತಿನಿಂದ ಯೆಹೂದ್ಯರನ್ನು ಓಡಿಸಿಬಿಟ್ಟನು; ಅರಾಮ್ಯರು ಏಲತಿಗೆ ಬಂದು ಇಂದಿನವರೆಗೂ ಅಲ್ಲಿ ವಾಸ ಮಾಡುತ್ತಿದ್ದಾರೆ.
16:7b.2KI.016.007 ಆದರೆ ಆಹಾಜನು ಅಶ್ಶೂರಿನ ಅರಸನಾದ ತಿಗ್ಲತ್ಪಿಲೇ ಸೆರನಿಗೆ--ನಾನು ನಿನ್ನ ಸೇವಕನೂ ನಿನ್ನ ಮಗನೂ ಆಗಿದ್ದೇನೆ; ನನಗೆ ವಿರೋಧವಾಗಿ ಎದ್ದ ಅರಾಮ್ಯರ ಅರಸನ ಕೈಗೂ ಇಸ್ರಾಯೇಲಿನ ಅರಸನ ಕೈಗೂ ನನ್ನನ್ನು ತಪ್ಪಿಸಿ ರಕ್ಷಿಸುವ ಹಾಗೆ ಬರ ಹೇಳು ಅಂದನು.
16:8b.2KI.016.008 ಇದಲ್ಲದೆ ಆಹಾಜನು ಕರ್ತನ ಮನೆಯಲ್ಲಿಯೂ ಅರಮನೆಯ ಬೊಕ್ಕಸಗಳಲ್ಲಿಯೂ ಸಿಕ್ಕಿದ ಬೆಳ್ಳಿ ಬಂಗಾರವನ್ನು ತಕ್ಕೊಂಡು ಕಾಣಿಕೆಯಾಗಿ ಅಶ್ಶೂರಿನ ಅರಸನಿಗೆ ಕಳುಹಿ ಸಿದನು.
16:9b.2KI.016.009 ಆಗ ಅಶ್ಶೂರಿನ ಅರಸನು ಅವನ ಮಾತು ಕೇಳಿ ದಮಸ್ಕಕ್ಕೆ ಹೋಗಿ ಅದನ್ನು ಹಿಡಿದು ಅದರ ನಿವಾಸಿಗಳನ್ನು ಕೀರ್ ಪ್ರಾಂತಕ್ಕೆ ಸೆರೆಯಾಗಿ ತಂದು ರೆಚೀನನನ್ನು ಕೊಂದುಹಾಕಿದನು.
16:10b.2KI.016.010 ಅರಸನಾದ ಆಹಾಜನು ಅಶ್ಶೂರಿನ ಅರಸನಾದ ತಿಗ್ಲತ್ಪಿಲೇಸೆರನನ್ನು ಎದುರುಗೊಳ್ಳಲು ದಮಸ್ಕಕ್ಕೆ ಹೋಗಿ ಅಲ್ಲಿ ಒಂದು ಬಲಿಪೀಠವನ್ನು ಕಂಡನು. ಆಗ ಅರಸ ನಾದ ಆಹಾಜನು ಆ ಬಲಿಪೀಠದ ರೂಪವನ್ನೂ ಅದರ ಎಲ್ಲಾ ಕೈ ಕೆಲಸದ ಪ್ರಕಾರ ಮಾದರಿಯನ್ನೂ ಯಾಜಕನಾದ ಊರೀಯನಿಗೆ ಕಳುಹಿಸಿದನು.
16:11b.2KI.016.011 ಆಗ ಯಾಜಕನಾದ ಊರೀಯನು ಅರಸನಾದ ಆಹಾಜನು ದಮಸ್ಕದಿಂದ ಕಳುಹಿಸಿದ ಪ್ರಕಾರವೇ ಒಂದು ಬಲಿ ಪೀಠವನ್ನು ಕಟ್ಟಿಸಿದನು; ಹಾಗೆಯೇ ಅರಸನಾದ ಆಹಾಜನು ದಮಸ್ಕದಿಂದ ಬಂದಾಗ ಯಾಜಕನಾದ ಊರೀಯನು ಅದನ್ನು ಮಾಡಿಸಿದನು.
16:12b.2KI.016.012 ಅರಸನು ದಮಸ್ಕದಿಂದ ಬಂದ ಮೇಲೆ ಬಲಿಪೀಠವನ್ನು ನೋಡಿ ಬಲಿಪೀಠದ ಬಳಿಗೆ ಹೋಗಿ ಅದರ ಮೇಲೆ ಬಲಿ ಯನ್ನರ್ಪಿಸಿದನು.
16:13b.2KI.016.013 ಬಲಿಪೀಠದ ಮೇಲೆ ತನ್ನ ದಹನ ಬಲಿಯನ್ನೂ ಆಹಾರ ಸಮರ್ಪಣೆಯನ್ನೂ ಸುಟ್ಟು ತನ್ನ ಪಾನಗಳನ್ನು ಹೊಯಿದನು. ಸಮಾಧಾನದ ಬಲಿ ಗಳ ರಕ್ತವನ್ನು ಚಿಮಿಕಿಸಿದನು.
16:14b.2KI.016.014 ಆದರೆ ಕರ್ತನ ಸಮ್ಮುಖದಲ್ಲಿದ್ದ ಹಿತ್ತಾಳೆಯ ಬಲಿಪೀಠವನ್ನು ಅವನು ಮನೆಯ ಮುಂಭಾಗದಿಂದಲೂ ಕರ್ತನ ಮನೆಗೂ ಬಲಿಪೀಠಕ್ಕೂ ಮಧ್ಯದಿಂದಲೂ ತಂದು ಅದನ್ನು ಈ ಬಲಿಪೀಠಕ್ಕೆ ಉತ್ತರ ಪಾರ್ಶ್ವದಲ್ಲಿ ಇಟ್ಟನು.
16:15b.2KI.016.015 ಇದಲ್ಲದೆ ಅರಸನಾದ ಆಹಾಜನು ಯಾಜಕನಾದ ಊರೀಯನಿಗೆ --ಉದಯದಲ್ಲಿ ದಹನಬಲಿಯನ್ನೂ ಸಾಯಂಕಾಲದ ಆಹಾರ ಸಮರ್ಪಣೆಯನ್ನೂ ಅರಸನ ದಹನಬಲಿ ಯನ್ನೂ ಆಹಾರ ಅರ್ಪಣೆಯನ್ನೂ ದೇಶದ ಜನರೆಲ್ಲರ ದಹನಬಲಿಯನ್ನೂ ಅವರ ಆಹಾರ ಸಮರ್ಪಣೆ ಯನ್ನೂ ಪಾನಗಳನ್ನೂ ದೊಡ್ಡ ಬಲಿಪೀಠದ ಮೇಲೆ ಸುಟ್ಟು ದಹನಬಲಿಯ ರಕ್ತವೆಲ್ಲವನ್ನೂ ಬಲಿಯ ರಕ್ತವೆಲ್ಲವನ್ನೂ ಚಿಮಿಕಿಸು; ಆದರೆ ಹಿತ್ತಾಳೆ ಬಲಿಪೀಠವು ನಾನು ವಿಚಾರಿಸುವ ನಿಮಿತ್ತವಾಗಿ ಇರಲಿ ಎಂದು ಆಜ್ಞಾಪಿಸಿದನು.
16:16b.2KI.016.016 ಅರಸನಾದ ಆಹಾಜನು ಆಜ್ಞಾಪಿಸಿದ ಪ್ರಕಾರವೇ ಯಾಜಕನಾದ ಊರೀಯನು ಮಾಡಿದನು.
16:17b.2KI.016.017 ಇದ ಲ್ಲದೆ ಅರಸನಾದ ಆಹಾಜನು ಆಧಾರದ ಅಂಚುಗಳನ್ನು ಕೊಯ್ದು ಗಂಗಾಳವನ್ನು ಅದರ ಮೇಲಿನಿಂದ ತೆಗೆದು ಸಮುದ್ರ ಎಂಬ ಪಾತ್ರೆಯನ್ನು ಅದರ ಕೆಳಗಿರುವ ತಾಮ್ರದ ಎತ್ತುಗಳ ಮೇಲಿನಿಂದ ಇಳಿಸಿ ಅದನ್ನು ಕಲ್ಲುಗಳ ಕಟ್ಟೆಯ ಮೇಲೆ ಇಟ್ಟನು.
16:18b.2KI.016.018 ಇದಲ್ಲದೆ ಮನೆಯಲ್ಲಿ ಅವರು ಕಟ್ಟಿಸಿದ ಸಬ್ಬತ್ತಿಗೋಸ್ಕರ ಇದ್ದ ಒಪ್ಪಾರನ್ನೂ ಹೊರಗಿದ್ದ ಅರಸನ ಪ್ರವೇಶವನ್ನೂ ಅಶ್ಶೂರಿನ ಅರಸನ ನಿಮಿತ್ತವಾಗಿ ಕರ್ತನ ಮನೆಯಿಂದ ತಿರುಗಿಸಿದನು.
16:19b.2KI.016.019 ಆದರೆ ಆಹಾಜನು ಮಾಡಿದ ಇತರ ಕ್ರಿಯೆಗಳು ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?ಆಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು. ಅವನನ್ನು ದಾವೀ ದನ ಪಟ್ಟಣದಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು. ಅವನ ಮಗನಾದ ಹಿಜ್ಕೀಯನು ಅವ ನಿಗೆ ಬದಲಾಗಿ ಅರಸನಾದನು.
16:20b.2KI.016.020 ಆಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು. ಅವನನ್ನು ದಾವೀ ದನ ಪಟ್ಟಣದಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು. ಅವನ ಮಗನಾದ ಹಿಜ್ಕೀಯನು ಅವ ನಿಗೆ ಬದಲಾಗಿ ಅರಸನಾದನು.
17
17:1b.2KI.017.001 ಯೆಹೂದದ ಅರಸನಾದ ಆಹಾಜನ ಆಳ್ವಿಕೆಯ ಹನ್ನೆರಡನೇ ವರುಷದಲ್ಲಿ ಏಲನ ಮಗನಾದ ಹೋಶೇಯನು ಸಮಾರ್ಯದಲ್ಲಿ ಇಸ್ರಾ ಯೇಲಿನ ಮೇಲೆ ಒಂಭತ್ತು ವರುಷ ಆಳಿದನು.
17:2b.2KI.017.002 ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು; ಆದರೆ ತನಗೆ ಮುಂಚೆ ಇದ್ದ ಇಸ್ರಾಯೇಲಿನ ಅರಸುಗಳ ಹಾಗಲ್ಲ.
17:3b.2KI.017.003 ಅಶ್ಶೂರಿನ ಅರಸನಾದ ಶಲ್ಮನೆಸೆರನು ಅವನ ಮೇಲೆ ಬಂದದ್ದರಿಂದ ಹೋಶೇಯನು ಅವನಿಗೆ ಸೇವಕ ನಾಗಿ ಕಪ್ಪವನ್ನು ಕೊಟ್ಟನು.
17:4b.2KI.017.004 ಆದರೆ ಅಶ್ಶೂರಿನ ಅರಸನು ಹೋಶೇಯನಲ್ಲಿ ಒಳಸಂಚನ್ನು ಕಂಡುಹಿಡಿದನು. ಏನಂದರೆ, ಹೋಶೇಯನು ಅಶ್ಶೂರಿನ ಅರಸನಿಗೆ ಪ್ರತಿ ವರುಷಕ್ಕೂ ಕೊಡುವ ಕಪ್ಪವನ್ನು ಕೊಡದೆ ಐಗುಪ್ತದ ಅರಸನಾದ ಸೋ ಎಂಬವನ ಬಳಿಗೆ ಸೇವ ಕರನ್ನು ಕಳುಹಿಸಿದ್ದನು. ಆದದರಿಂದ ಅಶ್ಶೂರಿನ ಅರ ಸನು ಅವನನ್ನು ಕಟ್ಟಿ ಸೆರೆಮನೆಯಲ್ಲಿ ಬಂಧಿಸಿದನು.
17:5b.2KI.017.005 ಆಗ ಅಶ್ಶೂರಿನ ಅರಸನು ದೇಶವೆಲ್ಲಾದರ ಮೇಲೆ ಬಂದು, ಸಮಾರ್ಯಕ್ಕೆ ಹೋಗಿ ಅದನ್ನು ಮೂರು ವರುಷಗಳ ವರೆಗೂ ಮುತ್ತಿಗೆ ಹಾಕಿದನು.
17:6b.2KI.017.006 ಹೋಶೇ ಯನ ಒಂಭತ್ತನೇ ವರುಷದಲ್ಲಿ ಅಶ್ಶೂರಿನ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು ಇಸ್ರಾಯೇಲನ್ನು ಅಶ್ಶೂರಿಗೆ ಸೆರೆಯಾಗಿ ಒಯ್ದು ಗೋಜಾನು ನದಿಯ ಬಳಿಯಲ್ಲಿರುವ ಹಲಹುನಲ್ಲಿಯೂ ಹಾಬೋರಿನ ಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು.
17:7b.2KI.017.007 ಯಾಕೆ ಹೀಗಾಯಿತಂದರೆ, ಇಸ್ರಾಯೇಲಿನ ಮಕ್ಕಳು, ಐಗುಪ್ತದ ಅರಸನಾದ ಫರೋಹನ ಕೈಯಿಂದ ತಪ್ಪಿಸಿ ಐಗುಪ್ತದೇಶದೊಳಗಿಂದ ಬರ ಮಾಡಿದ ತಮ್ಮ ದೇವರಾದ ಕರ್ತನಿಗೆ ವಿರೋಧ ವಾಗಿ ಪಾಪಮಾಡಿ ಇತರ ದೇವರುಗಳಿಗೆ ಭಯಪಟ್ಟರು.
17:8b.2KI.017.008 ಇಸ್ರಾಯೇಲ್ಯರ ಮುಂದೆ ಕರ್ತನು ಹೊರ ಡಿಸಿಬಿಟ್ಟ ಅನ್ಯ ಜನಾಂಗಗಳ ಕಟ್ಟಳೆಗಳಲ್ಲಿಯೂ ಇಸ್ರಾ ಯೇಲಿನ ಅರಸುಗಳು ಮಾಡಿದ ಕಟ್ಟಳೆಗಳಲ್ಲಿಯೂ ನಡೆದರು.
17:9b.2KI.017.009 ಇಸ್ರಾಯೇಲಿನ ಮಕ್ಕಳು ಗುಪ್ತವಾಗಿ ತಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಅಯುಕ್ತ ವಾದವುಗಳನ್ನು ಮಾಡಿ ಬರುವ ಸ್ಥಳಗಳು ಮೊದಲು ಗೊಂಡು ಕೋಟೆಯುಳ್ಳ ಪಟ್ಟಣಗಳ ವರೆಗೂ ತಮ್ಮ ಎಲ್ಲಾ ಪಟ್ಟಣಗಳಲ್ಲಿ ತಮಗೆ ಉನ್ನತ ಸ್ಥಳಗಳನ್ನು ಕಟ್ಟಿಸಿ ಕೊಂಡಿದ್ದರು.
17:10b.2KI.017.010 ಇದಲ್ಲದೆ ಅವರು ಎತ್ತರವಾದ ಎಲ್ಲಾ ಗುಡ್ಡಗಳಲ್ಲಿ ತೋಪುಗಳನ್ನು ಹಾಕಿ ಹಸುರಾದ ಎಲ್ಲಾ ಮರಗಳ ಕೆಳಗೂ ತಮಗೆ ವಿಗ್ರಹಗಳನ್ನು ನಿಲ್ಲಿಸಿ
17:11b.2KI.017.011 ಅಲ್ಲಿ ಕರ್ತನು ತಮ್ಮ ಮುಂದೆ ಓಡಿಸಿಬಿಟ್ಟ ಅನ್ಯ ಜನಾಂಗಗಳ ಹಾಗೆ ಅವರು ಎಲ್ಲಾ ಉನ್ನತ ಸ್ಥಳಗಳಲ್ಲಿ ಧೂಪವನ್ನು ಸುಟ್ಟು ಕರ್ತನನ್ನು ಸಿಟ್ಟುಗೊಳಿಸುವ ಹಾಗೆ ಕೆಟ್ಟ ಕಾರ್ಯಗಳನ್ನು ಮಾಡಿದರು--
17:12b.2KI.017.012 ನೀವು ಈ ಕಾರ್ಯವನ್ನು ಮಾಡಬೇಡಿರೆಂದು ಕರ್ತನು ತಮಗೆ ಹೇಳಿದ ಮಣ್ಣು ಪ್ರತಿಮೆಗಳನ್ನು ಸೇವಿಸಿದರು.
17:13b.2KI.017.013 ನೀವು ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ತಿರುಗಿ ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ, ಪ್ರವಾದಿಗಳಾದ ನನ್ನ ಸೇವಕರ ಮುಖಾಂತರ ನಾನು ನಿಮಗೆ ಕಳುಹಿಸಿದ ನ್ಯಾಯಪ್ರಮಾಣದ ಪ್ರಕಾರ ನನ್ನ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳಿರೆಂದು ಕರ್ತನು ಎಲ್ಲಾ ಪ್ರವಾ ದಿಗಳ ಮುಖಾಂತರವಾಗಿಯೂ ಎಲ್ಲಾ ದರ್ಶಿಗಳ ಮುಖಾಂತರವಾಗಿಯೂ ಇಸ್ರಾಯೇಲಿಗೂ ಯೆಹೂ ದಕ್ಕೂ ಸಾಕ್ಷಿ ಹೇಳಿದನು.
17:14b.2KI.017.014 ಆದರೆ ಅವರು ಕೇಳ ದೆಯೂ ತಮ್ಮ ದೇವರಾದ ಕರ್ತನಲ್ಲಿ ನಂಬಿಕೆ ಇಡ ದೆಯೂ ತಮ್ಮ ಪಿತೃಗಳ ಕುತ್ತಿಗೆಯ ಹಾಗೆ ತಮ್ಮ ಕುತ್ತಿಗೆಯನ್ನು
17:15b.2KI.017.015 ಕಠಿಣಪಡಿಸಿ ಆತನ ಕಟ್ಟಳೆಗಳನ್ನೂ ಆತನು ತಮ್ಮ ಪಿತೃಗಳ ಸಂಗಡ ಮಾಡಿದ ಆತನ ಒಡಂಬಡಿಕೆಯನ್ನೂ ಆತನು ಅವರಿಗೆ ಹೇಳಿದ ಸಾಕ್ಷಿ ಗಳನ್ನೂ ಅಲಕ್ಷ್ಯಮಾಡಿ ವ್ಯರ್ಥವಾದದ್ದನ್ನು ಹಿಂಬಾ ಲಿಸಿ ವ್ಯರ್ಥವಾದವರಾಗಿ -- ನೀವು ಅವರ ಹಾಗೆ ಮಾಡಬೇಡಿರೆಂದು ಕರ್ತನು ಅವರಿಗೆ ಆಜ್ಞಾಪಿಸಿದರೂ ಅವರ ಸುತ್ತಲಿರುವ ಅನ್ಯಜನಾಂಗಗಳ ಹಿಂದೆ ಹೋದರು.
17:16b.2KI.017.016 ಇದಲ್ಲದೆ ಅವರು ತಮ್ಮ ದೇವರಾದ ಕರ್ತನ ಎಲ್ಲಾ ಆಜ್ಞೆಗಳನ್ನು ಬಿಟ್ಟು ತಮಗೆ ತಾವೇ ಎರಕ ಹೊಯ್ದ ವಿಗ್ರಹಗಳಾದ ಎರಡು ಹೋರಿಗಳನ್ನು ಮಾಡಿಕೊಂಡು ವಿಗ್ರಹಗಳ ತೋಪನ್ನು ಮಾಡಿ ಆಕಾಶದ ಸೈನ್ಯಕ್ಕೆಲ್ಲಾ ಅಡ್ಡಬಿದ್ದು ಬಾಳನನ್ನು ಸೇವಿಸಿ
17:17b.2KI.017.017 ತಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ಬೆಂಕಿಯಲ್ಲಿ ದಾಟಮಾಡಿ ಕಣಿಗಳನ್ನೂ ಶಕುನಗಳನ್ನೂ ಬಳಸಿ ಕರ್ತ ನಿಗೆ ಕೋಪ ಬರುವಂತೆ ಆತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಲು ತಮ್ಮನ್ನು ಮಾರಿಬಿಟ್ಟರು.
17:18b.2KI.017.018 ಆದದರಿಂದ ಕರ್ತನು ಇಸ್ರಾಯೇಲಿನ ಮೇಲೆ ಬಹುಕೋಪ ಗೊಂಡು ಅವರನ್ನು ತನ್ನ ಸಮ್ಮುಖದಿಂದ ತೆಗೆದುಹಾಕಿ ದನು. ಯೆಹೂದದ ಗೋತ್ರದ ಹೊರತಾಗಿ ಇನ್ಯಾರೂ ಉಳಿದದ್ದಿಲ್ಲ.
17:19b.2KI.017.019 ಆದರೆ ಯೆಹೂದದವರು ತಮ್ಮ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಳ್ಳದೆ ಇಸ್ರಾ ಯೇಲು ಮಾಡಿಕೊಂಡ ಕಟ್ಟಳೆಗಳಲ್ಲಿ ನಡೆದರು.
17:20b.2KI.017.020 ಆದದರಿಂದ ಕರ್ತನು ಇಸ್ರಾಯೇಲಿನ ಸಂತತಿ ಯನ್ನೆಲ್ಲಾ ಅಲಕ್ಷ್ಯಮಾಡಿಬಿಟ್ಟು ಅವರನ್ನು ಕುಂದಿಸಿ ಅವರನ್ನು ತನ್ನ ಸಮ್ಮುಖದಿಂದ ತಳ್ಳಿಬಿಡುವ ವರೆಗೆ ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು.
17:21b.2KI.017.021 ಅವನು ಇಸ್ರಾಯೇಲನ್ನು ದಾವೀದನ ಮನೆಯಿಂದ ಹರಿದುಬಿಟ್ಟನು; ಅವರು ನೆಬಾಟನ ಮಗನಾದ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಆಗ ಯಾರೊಬ್ಬಾಮನು ಇಸ್ರಾಯೇಲ್ಯರನ್ನು ಕರ್ತ ನನ್ನು ಹಿಂಬಾಲಿಸುವದರಿಂದ ತಪ್ಪಿಸಿ ಅವರನ್ನು ಮಹಾ ಪಾಪಮಾಡಲು ಪ್ರೇರೇಪಿಸಿದನು.
17:22b.2KI.017.022 ಕರ್ತನು ಪ್ರವಾ ದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ ಹಾಗೆ ಅವನು ಇಸ್ರಾಯೇಲನ್ನು ತನ್ನ ಸಮ್ಮುಖದಿಂದ ತೆಗೆದು ಹಾಕುವ ವರೆಗೆ ಇಸ್ರಾಯೇಲಿನ ಮಕ್ಕಳು ಯಾರೊ ಬ್ಬಾಮನು ಮಾಡಿದ ಎಲ್ಲಾ ಪಾಪಗಳಲ್ಲಿ ನಡೆದರು; ಅವುಗಳನ್ನು ತೊರೆದು ಬಿಡಲಿಲ್ಲ.
17:23b.2KI.017.023 ಹೀಗೆಯೇ ಇಸ್ರಾ ಯೇಲಿನವರು ಇಂದಿನ ವರೆಗೂ ತಮ್ಮ ದೇಶದಿಂದ ಅಶ್ಶೂರಿಗೆ ಸೆರೆಯಾಗಿ ಒಯ್ಯಲ್ಪಟ್ಟರು.
17:24b.2KI.017.024 ಅಶ್ಶೂರಿನ ಅರಸನು ಬಾಬೆಲಿನಿಂದಲೂ ಕೂತಾ ಅವ್ವಾ ಹಮಾತ್ ಸೆಫರ್ವಯಿಮಿನಿಂದಲೂ ಜನರನ್ನು ಬರಮಾಡಿ ಅವರನ್ನು ಇಸ್ರಾಯೇಲ್ ಮಕ್ಕಳಿಗೆ ಬದ ಲಾಗಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದನು. ಇವರು ಸಮಾರ್ಯವನ್ನು ಸ್ವತಂತ್ರಿಸಿಕೊಂಡು ಅವರ ಪಟ್ಟಣಗಳಲ್ಲಿ ವಾಸಿಸಿದರು.
17:25b.2KI.017.025 ಆದರೆ ಅವರು ಅಲ್ಲಿ ವಾಸಿಸಲು ಆರಂಭಿಸಿದಾಗ ಅವರು ಕರ್ತನಿಗೆ ಭಯ ಪಡದಿದದ್ದರಿಂದ ಕರ್ತನು ಅವರ ಮಧ್ಯದಲ್ಲಿ ಸಿಂಹ ಗಳನ್ನು ಕಳುಹಿಸಿದನು. ಅವು ಅವರಲ್ಲಿ ಕೆಲವರನ್ನು ಕೊಂದುಹಾಕಿದವು.
17:26b.2KI.017.026 ಆದಕಾರಣ ಅವರು ಅಶ್ಶೂರಿನ ಅರಸನಿಗೆ--ನೀನು ಸೇರಿಸಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದ ಜನಾಂಗಗಳು ಆ ದೇಶದ ದೇವರ ಕ್ರಮವನ್ನು ತಿಳಿಯದೆ ಇದ್ದಾರೆ. ಅವರು ಆ ದೇಶದ ದೇವರ ಕ್ರಮವನ್ನು ತಿಳಿಯದೆ ಇದ್ದದರಿಂದ ಆತನು ಅವರ ಮಧ್ಯದಲ್ಲಿ ಸಿಂಹಗಳನ್ನು ಕಳುಹಿಸಿದ್ದಾನೆ; ಇಗೋ, ಅವು ಅವರನ್ನು ಕೊಂದುಹಾಕುತ್ತವೆ ಅಂದರು.
17:27b.2KI.017.027 ಆಗ ಅಶ್ಶೂರಿನ ಅರಸನು--ನೀವು ಅಲ್ಲಿಂದ ತಕ್ಕೊಂಡು ಬಂದಯಾಜಕರಲ್ಲಿ ಒಬ್ಬನನ್ನು ಅಲ್ಲಿಗೆ ಕರೆದುಕೊಂಡು ಹೋಗಿರಿ; ಅವರು ಅಲ್ಲಿ ವಾಸವಾಗಿರಲಿ; ಅವನು ಅವರಿಗೆ ಆ ದೇಶದ ದೇವರ ಕ್ರಮವನ್ನು ಬೋಧಿಸಲಿ ಎಂದು ಆಜ್ಞಾಪಿಸಿದನು.
17:28b.2KI.017.028 ಆಗ ಅವರು ಸಮಾರ್ಯ ದಿಂದ ತಂದ ಯಾಜಕರಲ್ಲಿ ಒಬ್ಬನು ಬಂದು ಬೇತೇಲಿ ನಲ್ಲಿ ವಾಸವಾಗಿದ್ದು ಅವರು ಕರ್ತನಿಗೆ ಭಯಪಡತಕ್ಕ ವಿಧವನ್ನು ಅವರಿಗೆ ಬೋಧಿಸಿದನು.
17:29b.2KI.017.029 ಆದರೆ ಪ್ರತಿ ಜನಾಂಗದವರೂ ತಾವು ನಿವಾಸಿಸಿದ ಪಟ್ಟಣಗಳಲ್ಲಿ ತಮಗೆ ದೇವರುಗಳನ್ನು ಮಾಡಿ ಸಮಾರ್ಯದವರು ಮಾಡಿದ ಉನ್ನತ ಸ್ಥಳಗಳ ಮನೆಗಳಲ್ಲಿ ಅವುಗಳನ್ನು ಇರಿಸಿದರು.
17:30b.2KI.017.030 ಬಾಬೆಲಿನ ಜನರು ಸುಕ್ಕೋತ್ಬೆನೋತನ್ನು ಮಾಡಿದರು; ಕೂತದವರು ನೇರ್ಗಲನ್ನು ಮಾಡಿದರು; ಹಮಾತಿನ ಮನುಷ್ಯರು ಅಷೀಮನನ್ನು ಮಾಡಿದರು.
17:31b.2KI.017.031 ಅವ್ವೀಯರು ನಿಭಜನನ್ನೂ ತರ್ತಕನನ್ನೂ ಮಾಡಿ ದರು. ಸೆಫರ್ವಯಿಮಿನವರು ಸೆಫರ್ವಾಯಿಮಿನ ದೇವ ರುಗಳಾದ ಅದ್ರಮ್ಮೆಲಕಿಗೂ ಅನಮ್ಮೆಲಕಿಗೂ ತಮ್ಮ ಮಕ್ಕಳನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
17:32b.2KI.017.032 ಹೀಗೆ ಅವರು ಕರ್ತನಿಗೆ ಭಯಪಟ್ಟು ತಮ್ಮಲ್ಲಿರುವ ನೀಚ ರೊಳಗೆ ಉನ್ನತ ಸ್ಥಾನಕ್ಕೋಸ್ಕರ ಯಾಜಕರನ್ನು ಮಾಡಿ ಕೊಂಡರು. ಇವರು ಉನ್ನತ ಸ್ಥಳಗಳ ಮೇಲಿರುವ ಮನೆಗಳಲ್ಲಿ ಅವರಿಗೋಸ್ಕರ ಬಲಿಗಳನ್ನು ಅರ್ಪಿಸುತ್ತಾ ಇದ್ದರು.
17:33b.2KI.017.033 ಅವರು ಕರ್ತನಿಗೆ ಭಯಪಟ್ಟು ಅವರು ಅಲ್ಲಿಂದ ಒಯ್ದು ಜನಾಂಗಗಳ ಪದ್ಧತಿಯ ಪ್ರಕಾರ ತಮ್ಮ ದೇವರುಗಳನ್ನು ಸೇವಿಸಿದರು.
17:34b.2KI.017.034 ಈ ದಿವಸದ ವರೆಗೂ ಅವರು ತಮ್ಮ ಪೂರ್ವದ ನ್ಯಾಯಗಳ ಪ್ರಕಾರ ಮಾಡುತ್ತಾರೆ; ಅವರು ಕರ್ತನಿಗೆ ಭಯಪಡದೆ ತಮ್ಮ ಕಟ್ಟಳೆಗಳ ಪ್ರಕಾರವಾಗಿಯೂ ತಮ್ಮ ನೀತಿಗಳ ಪ್ರಕಾರವಾಗಿಯೂ ನ್ಯಾಯಪ್ರಮಾ ಣದ ಪ್ರಕಾರವಾಗಿಯೂ ಕರ್ತನು ಇಸ್ರಾಯೇಲೆಂದು ಹೆಸರಿಟ್ಟ ಯಾಕೋಬನ ಮಕ್ಕಳಿಗೆ ಆಜ್ಞಾಪಿಸಿದ ಆಜ್ಞೆಯ ಪ್ರಕಾರವಾಗಿಯೂ ಮಾಡದೆ ಇದ್ದಾರೆ.
17:35b.2KI.017.035 ಕರ್ತನು ಅವರ ಸಂಗಡ ಒಡಂಬಡಿಕೆ ಮಾಡಿ ಅವರಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ--ನೀವು ಇತರ ದೇವರುಗಳಿಗೆ ಭಯಪಡದೆ ಅಡ್ಡಬೀಳದೆ ಸೇವಿಸದೆ ಅವುಗಳಿಗೆ ಬಲಿ ಯನ್ನು ಅರ್ಪಿಸದೆ ಇರ್ರಿ.
17:36b.2KI.017.036 ಆದರೆ ಮಹಾಶಕ್ತಿ ಯಿಂದಲೂ ಭುಜಪರಾಕ್ರಮದಿಂದಲೂ ಐಗುಪ್ತದೇಶ ದಿಂದ ನಿಮ್ಮನ್ನು ಬರಮಾಡಿದ ಕರ್ತನಿಗೆ ನೀವು ಭಯಪಟ್ಟು ಅಡ್ಡಬಿದ್ದು ಆತನಿಗೆ ಬಲಿಯನ್ನು ಅರ್ಪಿ ಸಿರಿ.
17:37b.2KI.017.037 ಇದಲ್ಲದೆ ಆತನು ನಿಮಗೆ ಬರೆದುಕೊಟ್ಟ ಕಟ್ಟಳೆಗಳನ್ನೂ ನೀತಿಗಳನ್ನೂ ನ್ಯಾಯಪ್ರಮಾಣವನ್ನೂ ಆಜ್ಞೆಯನ್ನೂ ನೀವು ನಿರಂತರವಾಗಿ ಕೈಕೊಳ್ಳಲು ಎಚ್ಚರಿಕೆ ಯಾಗಿರಬೇಕು; ಇತರ ದೇವರುಗಳಿಗೆ ಭಯಪಡ ಬೇಡಿರಿ.
17:38b.2KI.017.038 ನಾನು ನಿಮ್ಮ ಸಂಗಡ ಮಾಡಿದ ಒಡಂಬಡಿ ಕೆಯನ್ನು ನೀವು ಮರೆಯದೆ ಇತರ ದೇವರುಗಳಿಗೆ ಭಯಪಡದೆ
17:39b.2KI.017.039 ನಿಮ್ಮ ದೇವರಾದ ಕರ್ತನಿಗೆ ಭಯ ಪಡಿರಿ. ಆಗ ಆತನು ನಿಮ್ಮನ್ನು ನಿಮ್ಮ ಶತ್ರುಗಳ ಕೈಯೊಳಗಿಂದ ವಿಮೋಚನೆ ಮಾಡುವನು ಅಂದನು.
17:40b.2KI.017.040 ಆದರೆ ಅವರು ಕೇಳದೆ ತಮ್ಮ ಪೂರ್ವದ ಪದ್ಧತಿ ಹಾಗೆ ಮಾಡಿದರು.ಹೀಗೆಯೇ ಈ ಜನಾಂಗಗಳು ಕರ್ತನಿಗೆ ಭಯಪಡದೆ ತಮ್ಮ ಕೆತ್ತಿದ ವಿಗ್ರಹಗಳನ್ನು ಸೇವಿಸಿದರು; ಅವರ ಪಿತೃಗಳು ಮಾಡಿದ ಹಾಗೆ ಅವರೂ ಅವರ ಮಕ್ಕಳೂ ಮೊಮ್ಮಕ್ಕಳೂ ಇಂದಿನ ವರೆಗೂ ಮಾಡುತ್ತಿರುತ್ತಾರೆ.
17:41b.2KI.017.041 ಹೀಗೆಯೇ ಈ ಜನಾಂಗಗಳು ಕರ್ತನಿಗೆ ಭಯಪಡದೆ ತಮ್ಮ ಕೆತ್ತಿದ ವಿಗ್ರಹಗಳನ್ನು ಸೇವಿಸಿದರು; ಅವರ ಪಿತೃಗಳು ಮಾಡಿದ ಹಾಗೆ ಅವರೂ ಅವರ ಮಕ್ಕಳೂ ಮೊಮ್ಮಕ್ಕಳೂ ಇಂದಿನ ವರೆಗೂ ಮಾಡುತ್ತಿರುತ್ತಾರೆ.
18
18:1b.2KI.018.001 ಇಸ್ರಾಯೇಲಿನ ಅರಸನಾಗಿರುವ ಏಲನ ಮಗನಾದ ಹೋಶೇಯನ ಆಳ್ವಿಕೆಯ ಮೂರನೇ ವರುಷದಲ್ಲಿ ಯೆಹೂದದ ಅರಸನಾಗಿರುವ ಆಹಾಜನ ಮಗನಾದ ಹಿಜ್ಕೀಯನು ಆಳಲು ಆರಂಭಿ ಸಿದನು.
18:2b.2KI.018.002 ಅವನು ಆಳಲು ಆರಂಭಿಸಿದಾಗ ಇಪ್ಪ ತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಇಪ್ಪ ತ್ತೊಂಭತ್ತು ವರುಷ ಆಳಿದನು. ಅವನ ತಾಯಿಯ ಹೆಸರು ಅಬಿಯು; ಅವಳು ಜೆಕರ್ಯನ ಮಗಳಾಗಿದ್ದಳು.
18:3b.2KI.018.003 ಅವನು ತನ್ನ ತಂದೆಯಾದ ದಾವೀದನು ಮಾಡಿದ ಹಾಗೆ ಕರ್ತನ ದೃಷ್ಟಿಗೆ ಒಳ್ಳೆಯದನ್ನು ಮಾಡಿದನು.
18:4b.2KI.018.004 ಅವನು ಉನ್ನತ ಸ್ಥಳಗಳನ್ನು ತೆಗೆದುಹಾಕಿ, ವಿಗ್ರಹ ಗಳನ್ನು ಒಡೆದುಬಿಟ್ಟು, ತೋಪುಗಳನ್ನು ಕಡಿದುಹಾಕಿ, ಮೋಶೆಯು ಮಾಡಿದ ತಾಮ್ರದ ಸರ್ಪವನ್ನು ಚೂರುಚೂರು ಮಾಡಿದನು. ಆ ದಿವಸಗಳ ವರೆಗೂ ಇಸ್ರಾ ಯೇಲಿನ ಮಕ್ಕಳು ಅದಕ್ಕೆ ಧೂಪಸುಡುತ್ತಿದ್ದರು. ಅದನ್ನು ತಾಮ್ರದ ತುಂಡು ಎಂದು ಅವನು ಕರೆದನು.
18:5b.2KI.018.005 ಅವನು ಇಸ್ರಾಯೇಲಿನ ದೇವರಾದ ಕರ್ತನಲ್ಲಿ ಭರವಸವುಳ್ಳ ವನಾಗಿದ್ದನು; ಅವನಿಗೆ ಮುಂಚೆ ಇದ್ದವರಲ್ಲಿಯೂ ಅವನ ತರುವಾಯ ಯೆಹೂದದ ಎಲ್ಲಾ ಅರಸುಗಳ ಲ್ಲಿಯೂ ಅವನ ಹಾಗೆ ಇದ್ದವನು ಒಬ್ಬನೂ ಇಲ್ಲ.
18:6b.2KI.018.006 ಅವನು ಕರ್ತನನ್ನು ಹಿಂಬಾಲಿಸುವದನ್ನು ಬಿಟ್ಟುಬಿಡದೆ ಆತನಿಗೆ ಹೊಂದಿಕೊಂಡು ಕರ್ತನು ಮೋಶೆಗೆ ಆಜ್ಞಾ ಪಿಸಿದ ಆಜ್ಞೆಗಳನ್ನು ಕೈಕೊಂಡನು.
18:7b.2KI.018.007 ಕರ್ತನು ಅವನ ಸಂಗಡ ಇದ್ದನು; ಅವನು ಯಾವ ಕಡೆಗೆ ಹೋದರೂ ಅವನಿಗೆ ಸಫಲವಾಗುತ್ತಿತ್ತು. ಅವನು ಅಶ್ಶೂರಿನ ಅರಸ ನನ್ನು ಸೇವಿಸದೆ ಅವನ ಮೇಲೆ ತಿರುಗಿ ಬಿದ್ದನು.
18:8b.2KI.018.008 ಅವನು ಫಿಲಿಷ್ಟಿಯರನ್ನು ಗಾಜದ ವರೆಗೂ ಅದರ ಮೇರೆಗಳ ವರೆಗೂ ಕಾವಲುಗಾರರ ಬುರುಜುಗಳ ಮೊದಲುಗೊಂಡು ಕೋಟೆಯುಳ್ಳ ಪಟ್ಟಣದ ವರೆಗೂ ಸಂಹರಿಸಿದನು.
18:9b.2KI.018.009 ಇಸ್ರಾಯೇಲಿನ ಅರಸನಾಗಿರುವ ಏಲನ ಮಗ ನಾದ ಹೋಶೇಯನ ಆಳ್ವಿಕೆಯ ಏಳನೇ ವರುಷದಲ್ಲಿ, ಅರಸನಾಗಿರುವ ಹಿಜ್ಕೀಯನ ನಾಲ್ಕನೇ ವರುಷದಲ್ಲಿ ಏನಾಯಿತಂದರೆ, ಅಶ್ಶೂರಿನ ಅರಸನಾದ ಶಲ್ಮನೆಸೆರನು ಸಮಾರ್ಯದ ಮೇಲೆ ಬಂದು ಅದನ್ನು ಮುತ್ತಿಗೆ ಹಾಕಿದನು.
18:10b.2KI.018.010 ಮೂರು ವರುಷವಾದ ತರುವಾಯ ಅವರು ಅದನ್ನು ತೆಗೆದುಕೊಂಡರು. ಇಸ್ರಾಯೇಲಿನ ಅರಸನಾಗಿರುವ ಹೋಶೇಯನ ಆಳ್ವಿಕೆಯ ಒಂಭತ್ತನೇ ವರುಷವಾದ ಹಿಜ್ಕೀಯನ ಆರನೇ ವರುಷದಲ್ಲಿ ಸಮಾ ರ್ಯವು ತೆಗೆದುಕೊಳ್ಳಲ್ಪಟ್ಟಿತು.
18:11b.2KI.018.011 ಅಶ್ಶೂರಿನ ಅರಸನು ಅಶ್ಶೂರಕ್ಕೆ ಇಸ್ರಾಯೇಲನ್ನು ಸೆರೆಯಾಗಿ ಒಯ್ದು ಗೋಜಾನ್ ನದಿಯ ಬಳಿಯಲ್ಲಿ ಹಲಹುನಲ್ಲಿಯೂ ಹಾಬೋರಿನಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು.
18:12b.2KI.018.012 ಅವರು ತಮ್ಮ ದೇವರಾದ ಕರ್ತನ ಶಬ್ದವನ್ನು ಕೇಳದೆ ಆತನ ಒಡಂಬಡಿಕೆಯನ್ನೂ ಕರ್ತನ ಸೇವಕನಾದ ಮೋಶೆಯು ಆಜ್ಞಾಪಿಸಿದ್ದ ಎಲ್ಲ ವನ್ನೂ ವಿಾರಿದರು; ಅವುಗಳನ್ನು ಕೇಳದೆಯೂ ಮಾಡ ದೆಯೂ ಹೋದರು.
18:13b.2KI.018.013 ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೇ ವರುಷದಲ್ಲಿ ಅಶ್ಶೂರಿನ ಅರಸನಾದ ಸನ್ಹೇರೀಬನು ಯೆಹೂದದ ಕೋಟೆಯುಳ್ಳ ಸಕಲ ಪಟ್ಟಣಗಳ ಮೇಲೆ ಬಂದು ಅವುಗಳನ್ನು ವಶಪಡಿಸಿಕೊಂಡನು.
18:14b.2KI.018.014 ಆಗ ಯೆಹೂದದ ಅರಸನಾದ ಹಿಜ್ಕೀಯನು ಲಾಕೀ ಷನ ಬಳಿಯಲ್ಲಿದ್ದ ಅಶ್ಶೂರಿನ ಅರಸನಿಗೆ--ನಾನು ಪಾಪಮಾಡಿದ್ದೇನೆ; ನನ್ನನ್ನು ಬಿಟ್ಟು ಹಿಂತಿರಿಗಿ ಹೋಗು; ನೀನು ನನ್ನ ಮೇಲೆ ಹೊರಿಸುವದನ್ನು ನಾನು ತಾಳಿಕೊಳ್ಳುತ್ತೇನೆ ಎಂದು ಹೇಳಿ ಕಳುಹಿಸಿ ದನು. ಆಗ ಅಶ್ಶೂರಿನ ಅರಸನು ಯೆಹೂದದ ಅರಸನಾದ ಹಿಜ್ಕೀಯನಿಗೆ ಮುನ್ನೂರು ತಲಾಂತು ಬೆಳ್ಳಿಯನ್ನೂ ಮೂವತ್ತು ತಲಾಂತು ಬಂಗಾರವನ್ನೂ ಕೊಡಲು ನೇಮಕ ಮಾಡಿದನು.
18:15b.2KI.018.015 ಆದದರಿಂದ ಹಿಜ್ಕೀಯನು ಕರ್ತನ ಮನೆಯಲ್ಲಿಯೂ ಅರಸನ ಮನೆಯ ಬೊಕ್ಕಸಗಳಲ್ಲಿಯೂ ಸಿಕ್ಕಿದ ಎಲ್ಲಾ ಬೆಳ್ಳಿ ಯನ್ನು ಕೊಟ್ಟನು.
18:16b.2KI.018.016 ಆ ಕಾಲದಲ್ಲಿ ಯೆಹೂದದ ಅರಸನಾದ ಹಿಜ್ಕೀಯನು ಕರ್ತನ ಮಂದಿರದ ಕದ ಗಳ ಮೇಲೆಯೂ ಸ್ತಂಭಗಳ ಮೇಲೆಯೂ ತಾನು ಹೊದಿಸಿದ್ದ ಬಂಗಾರವನ್ನು ಕತ್ತರಿಸಿ ಅಶ್ಶೂರಿನ ಅರಸ ನಿಗೆ ಕೊಟ್ಟನು.
18:17b.2KI.018.017 ಅಶ್ಶೂರಿನ ಅರಸನು ಲಾಕೀಷಿನಿಂದ ತರ್ತಾನ ನನ್ನೂ ರಬ್ಸಾರೀಸನನ್ನೂ ರಬ್ಷಾಕೆಯನ್ನೂ ದೊಡ್ಡ ದಂಡನ್ನೂ ಯೆರೂಸಲೇಮಿನಲ್ಲಿದ್ದ ಅರಸನಾದ ಹಿಜ್ಕೀ ಯನ ಬಳಿಗೆ ಕಳುಹಿಸಿದನು. ಅವರು ಯೆರೂಸಲೇಮಿಗೆ ಬಂದು ಅರಸನ ಹೊಲದ ರಾಜ ಮಾರ್ಗದಲ್ಲಿರುವ ಮೇಲಿನ ಕೆರೆಯ ಕಾಲುವೆಯ ಬಳಿಯಲ್ಲಿ ನಿಂತರು. ಅವರು ಅರಸನನ್ನು ಕರೇ ಕಳುಹಿಸಿದರು.
18:18b.2KI.018.018 ಆದರೆ ಮನೆವಾರ್ತೆಯವನಾದ ಹಿಲ್ಕೀಯನ ಮಗನಾದ ಎಲ್ಯಾ ಕೀಮನೂ ಲೇಖಕನಾದ ಶೆಬ್ನನೂ ಸಂಪ್ರತಿಯವನಾದ ಆಸಾಫನ ಮಗನಾದ ಯೋವನೂ ಅವರ ಬಳಿಗೆ ಬಂದರು.
18:19b.2KI.018.019 ಆಗ ರಬ್ಷಾಕೆಯು ಅವರಿಗೆ--ನೀವು ಹಿಜ್ಕೀಯನಿಗೆ ಹೇಳಬೇಕಾದದ್ದೇನಂದರೆ, ಮಹಾ ಅರಸನಾದ ಅಶ್ಶೂರಿನ ಅರಸನು ಹೇಳುವದೇನಂದರೆ, ಭರವಸವಾಗಿರುವ ಈ ನಂಬಿಕೆಯೇನು?
18:20b.2KI.018.020 ಯುದ್ಧ ಕ್ಕಾಗಿ ಯೋಚನೆಯೂ ಪರಾಕ್ರಮವೂ ಉಂಟೆಂದು ನೀನು ಹೇಳುತ್ತೀ. ಆದರೆ ಅವು ವ್ಯರ್ಥವಾದ ಮಾತು ಗಳು.
18:21b.2KI.018.021 ನೀನು ನನಗೆ ವಿರೋಧವಾಗಿ ತಿರುಗಿ ಬೀಳು ವದಕ್ಕೆ ಯಾರಲ್ಲಿ ಭರವಸ ಇಟ್ಟಿದ್ದೀ? ಇಗೋ, ನೀನು ಮುರಿದ ಬೆತ್ತದ ಕೋಲಾದ ಐಗುಪ್ತದ ಮೇಲೆ ಭರ ವಸವಾಗಿದ್ದೀ. ಅದರ ಮೇಲೆ ಮನುಷ್ಯನು ಊರಿ ಕೊಂಡರೆ ಅದು ಅವನ ಕೈಯಲ್ಲಿ ಹೊಕ್ಕು ಚುಚ್ಚುವದು. ಐಗುಪ್ತದ ಅರಸನಾದ ಫರೋಹನು ತನ್ನಲ್ಲಿ ಭರವಸ ವಾಗಿರುವ ಎಲ್ಲರಿಗೂ ಹೀಗೆಯೇ ಇದ್ದಾನೆ.
18:22b.2KI.018.022 ಆದರೆ ನೀವು ನನಗೆ--ನಮ್ಮ ದೇವರಾದ ಕರ್ತನಲ್ಲಿ ಭರವಸ ವುಳ್ಳವರಾಗಿದ್ದೇವೆಂದು ಹೇಳಿದರೆ ಹಿಜ್ಕೀಯನು ಯಾವನ ಉನ್ನತ ಸ್ಥಳಗಳನ್ನೂ ಬಲಿಪೀಠಗಳನ್ನೂ ತೆಗೆದುಹಾಕಿ--ಯೆಹೂದದವರಿಗೂ ಯೆರೂಸಲೇಮಿ ನವರಿಗೂ ನೀವು ಯೆರೂಸಲೇಮಿನಲ್ಲಿ ಈ ಬಲಿಪೀಠದ ಮುಂದೆ ಅಡ್ಡಬೀಳಬೇಕೆಂದು ಹೇಳಿದವನು ಅವನೇ ಅಲ್ಲವೋ?
18:23b.2KI.018.023 ಹಾಗಾದರೆ ಈಗ ನೀನು ದಯಮಾಡಿ ಅಶ್ಶೂರಿನ ಅರಸನಾದ ನನ್ನ ಯಜಮಾನನಿಗೆ ಹೊಣೆ ಗಾರರನ್ನು ಕೊಡು; ಈಗ ನೀನು ಅವುಗಳ ಮೇಲೆ ಏರುವವರನ್ನು ಇಡಲು ನಿನಗೆ ಸಾಮರ್ಥ್ಯವಿದ್ದರೆ ಎರಡು ಸಾವಿರ ಕುದುರೆಗಳನ್ನು ಕೊಡುತ್ತೇನೆ.
18:24b.2KI.018.024 ಹಾಗೆ ಇಲ್ಲದಿದ್ದರೆ ನನ್ನ ಯಜಮಾನನ ಚಿಕ್ಕ ಸೇವಕರಲ್ಲಿ ಒಬ್ಬ ಅಧಿಪತಿಯ ಮುಖವನ್ನು ಹೇಗೆ ತಿರುಗಿಸುವಿ? ಆದರೆ ನೀನು ರಥಗಳಿಗೋಸ್ಕರವೂ ರಾಹುತರಿಗೋ ಸ್ಕರವೂ ಐಗುಪ್ತದ ಮೇಲೆ ಭರವಸ ಇಟ್ಟಿದ್ದೀಯೋ?
18:25b.2KI.018.025 ಈ ಸ್ಥಳವನ್ನು ನಾಶಮಾಡುವದಕ್ಕೆ ಕರ್ತನ ಅಪ್ಪಣೆ ಇಲ್ಲದೆ ಬಂದಿದ್ದೇನೋ? ಈ ದೇಶದ ಮೇಲೆ ಹೋಗಿ ಅದನ್ನು ನಾಶಮಾಡೆಂದು ಕರ್ತನು ನನಗೆ ಹೇಳಿದನು ಅಂದನು.
18:26b.2KI.018.026 ಆಗ ಹಿಲ್ಕೀಯನ ಮಗನಾದ ಎಲ್ಯಾಕೀಮನೂ ಶೆಬ್ನನೂ ಯೋವನೂ ರಬ್ಷಾಕೆಗೆ--ನೀನು ದಯಮಾಡಿ ಅರಾಮ್ಯ ಭಾಷೆಯಲ್ಲಿ ನಿನ್ನ ಸೇವಕರ ಸಂಗಡ ಮಾತ ನಾಡು. ಅದು ನಮಗೆ ತಿಳಿಯುತ್ತದೆ; ಗೋಡೆಯ ಮೇಲಿರುವ ಜನರು ಕೇಳುವ ಹಾಗೆ ಯೆಹೂದ್ಯರ ಭಾಷೆಯಲ್ಲಿ ನಮ್ಮ ಸಂಗಡ ಮಾತನಾಡಬೇಡ ಅಂದರು.
18:27b.2KI.018.027 ಆದರೆ ರಬ್ಷಾಕೆಯು ಅವರಿಗೆ--ನನ್ನ ಯಜಮಾನನು ನಿನ್ನ ಯಜಮಾನನಿಗೂ ನಿನಗೂ ಈ ಮಾತುಗಳನ್ನು ಹೇಳಲು ನನ್ನನ್ನು ಕಳುಹಿಸಿದನೋ? ಗೋಡೆಯ ಮೇಲೆ ಕುಳಿತ ಜನರು ತಮ್ಮ ಮಲವನ್ನು ತಿಂದು ತಮ್ಮ ಮೂತ್ರವನ್ನು ನಿಮ್ಮ ಸಂಗಡ ಕುಡಿಯುವ ಹಾಗೆ ಅವರ ಬಳಿಗೆ ನನ್ನನ್ನು ಕಳುಹಿಸಲಿಲ್ಲವೋ ಎಂದು ಹೇಳಿದನು.
18:28b.2KI.018.028 ಆಗ ರಬ್ಷಾಕೆಯು ನಿಂತು ಕೊಂಡು ಯೆಹೂದ್ಯರ ಭಾಷೆಯಲ್ಲಿ ಮಹಾ ಶಬ್ದವಾಗಿ ಕೂಗಿ ಹೇಳಿದ್ದೇನಂದರೆ -- ಮಹಾ ಅರಸನಾದ ಅಶ್ಶೂರಿನ ಅರಸನ ಮಾತನ್ನು ಕೇಳಿರಿ.
18:29b.2KI.018.029 ಅರಸನು ಹೇಳುವದೇನಂದರೆ--ಹಿಜ್ಕೀಯನು ನಿಮ್ಮನ್ನು ಮೋಸ ಗೊಳಿಸದೆ ಇರಲಿ; ಅವನು ನಿಮ್ಮನ್ನು ಅವನ ಕೈಯೊಳ ಗಿಂದ ತಪ್ಪಿಸಲಾರನು.
18:30b.2KI.018.030 ಇದಲ್ಲದೆ ಕರ್ತನು ನಮ್ಮನ್ನು ತಪ್ಪಿಸೇ ತಪ್ಪಿಸುವನೆಂದೂ ಈ ಪಟ್ಟಣವು ಅಶ್ಶೂರಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲವೆಂದೂ ಹಿಜ್ಕೀ ಯನು ನಿಮಗೆ ಕರ್ತನಲ್ಲಿ ಭರವಸೆ ಹುಟ್ಟಿಸದೆ ಇರಲಿ.
18:31b.2KI.018.031 ಹಿಜ್ಕೀಯನ ಮಾತು ಕೇಳಬೇಡಿರಿ. ಅಶ್ಶೂರಿನ ಅರ ಸನು ಹೇಳುವದೇನಂದರೆ--ನೀವು ಸಾಯದೆ ಬದು ಕುವ ಹಾಗೆ ಕಾಣಿಕೆಯಿಂದ ನನ್ನ ಸಂಗಡ ಒಡಂಬಡಿಕೆ ಮಾಡಿ ನನ್ನ ಬಳಿಗೆ ಹೊರಟು ಬನ್ನಿರಿ.
18:32b.2KI.018.032 ನಾನು ಬಂದು ನಿಮ್ಮ ದೇಶದ ಹಾಗೆ ಧಾನ್ಯವೂ ದ್ರಾಕ್ಷಾರಸವೂ ಇರುವ ದೇಶಕ್ಕೆ, ರೊಟ್ಟಿಯೂ ದ್ರಾಕ್ಷೇ ತೋಟಗಳೂ ಇರುವ ದೇಶಕ್ಕೆ, ಎಣ್ಣೆಯನ್ನು ಕೊಡುವ ಇಪ್ಪೇ ಮರ ಗಳೂ ಜೇನೂ ಇರುವ ದೇಶಕ್ಕೆ, ನಿಮ್ಮನ್ನು ಕರಕೊಂಡು ಹೋಗುವ ವರೆಗೂ ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ತನ್ನ ದ್ರಾಕ್ಷೇ ಫಲವನ್ನೂ ಅಂಜೂರದ ಫಲವನ್ನೂ ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯಲಿ. ಆದರೆ--ಕರ್ತನು ನಮ್ಮನ್ನು ತಪ್ಪಿಸುವನೆಂದು ಹಿಜ್ಕೀ ಯನು ನಿಮ್ಮನ್ನು ಪ್ರೇರೇಪಿಸುವಾಗ ಅವನ ಮಾತು ಕೇಳಬೇಡಿರಿ.
18:33b.2KI.018.033 ಜನಾಂಗಗಳ ದೇವರುಗಳಲ್ಲಿ ಯಾವ ನಾದರೂ ತನ್ನ ದೇಶವನ್ನು ಅಶ್ಶೂರಿನ ಅರಸನ ಕೈಗೆ ತಪ್ಪಿಸಿಬಿಟ್ಟದ್ದು ಉಂಟೋ?
18:34b.2KI.018.034 ಹಮಾತ್ ಅರ್ಫಾದು ಗಳ ದೇವರುಗಳು ಎಲ್ಲಿ? ಸೆಫರ್ವಯಿಮ್, ಹೇನ. ಇವ್ವಾಗಳ ದೇವರುಗಳು ಎಲ್ಲಿ? ಅವರು ನನ್ನ ಕೈಗೆ ಸಮಾರ್ಯವನ್ನು ತಪ್ಪಿಸಿಬಿಟ್ಟದ್ದು ಉಂಟೋ? ಈ ದೇಶಗಳ ದೇವರುಗಳಲ್ಲಿ ತಮ್ಮ ದೇಶವನ್ನು ನನ್ನ ಕೈಗೆ ತಪ್ಪಿಸಿ ಬಿಟ್ಟ ದೇವರುಗಳು ಯಾರು
18:35b.2KI.018.035 ಹಾಗಾದರೆ ಕರ್ತನು ಯೆರೂಸಲೇಮನ್ನು ನನ್ನ ಕೈಗೆ ತಪ್ಪಿಸಿ ಬಿಟ್ಟಾನೋ ಅಂದನು.
18:36b.2KI.018.036 ಆದರೆ ಜನರು ಅವನಿಗೆ ಪ್ರತ್ಯುತ್ತರವನ್ನು ಹೇಳದೆ ಸುಮ್ಮನಿದ್ದರು. ಯಾಕಂದರೆ ಅವನಿಗೆ ಪ್ರತ್ಯುತ್ತರ ಹೇಳಬೇಡಿ ಎಂದು ಅವರಿಗೆ ಅರಸನ ಆಜ್ಞೆ ಇತ್ತು.ಆಗ ಮನೆವಾರ್ತೆಯವನಾದ ಹಿಲ್ಕೀಯನ ಮಗನಾದ ಎಲ್ಯಾಕೀಮನೂ ಲೇಖಕನಾದ ಶೆಬ್ನನೂ ಸಂಪ್ರತಿಯವನಾದ ಆಸಾಫನ ಮಗನಾದ ಯೋವನೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು ಹಿಜ್ಕೀಯನ ಬಳಿಗೆ ಬಂದು ರಬ್ಷಾಕೆಯು ಹೇಳಿದ ಮಾತುಗಳನ್ನು ಅವನಿಗೆ ತಿಳಿಸಿದರು.
18:37b.2KI.018.037 ಆಗ ಮನೆವಾರ್ತೆಯವನಾದ ಹಿಲ್ಕೀಯನ ಮಗನಾದ ಎಲ್ಯಾಕೀಮನೂ ಲೇಖಕನಾದ ಶೆಬ್ನನೂ ಸಂಪ್ರತಿಯವನಾದ ಆಸಾಫನ ಮಗನಾದ ಯೋವನೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು ಹಿಜ್ಕೀಯನ ಬಳಿಗೆ ಬಂದು ರಬ್ಷಾಕೆಯು ಹೇಳಿದ ಮಾತುಗಳನ್ನು ಅವನಿಗೆ ತಿಳಿಸಿದರು.
19
19:1b.2KI.019.001 ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡು ಗೋಣೀತಟ್ಟಿನಿಂದ ತನ್ನನ್ನು ಮುಚ್ಚಿಕೊಂಡು ಕರ್ತನ ಮನೆಯಲ್ಲಿ ಪ್ರವೇಶಿಸಿದನು.
19:2b.2KI.019.002 ಇದಲ್ಲದೆ ಅವನು ಗೋಣೀತಟ್ಟನ್ನು ಮುಚ್ಚಿಕೊಂಡ ಮನೆವಾರ್ತೆಯವ ನಾದ ಎಲ್ಯಾಕೀಮನನ್ನೂ ಲೇಖಕನಾದ ಶೆಬ್ನನನ್ನೂ ಯಾಜಕರ ಹಿರಿಯರನ್ನೂ ಆಮೋಚನ ಮಗನಾದ ಪ್ರವಾದಿಯಾದ ಯೆಶಾಯನ ಬಳಿಗೆ ಕಳುಹಿಸಿದನು.
19:3b.2KI.019.003 ಅವರು ಅವನಿಗೆ ಹೇಳಿದ್ದೇನಂದರೆ--ಹಿಜ್ಕೀಯನು ಹೇಳುವದೇನಂದರೆ--ಇದು ಇಕ್ಕಟ್ಟೂ ಗದರಿಕೆಯೂ ನಿಂದೆಯೂ ಆದ ದಿವಸ; ಯಾಕಂದರೆ ಹೆರಿಗೆಯ ಸಮಯವು ಬಂತು ಆದರೆ ಹೆರುವ ಶಕ್ತಿ ಇಲ್ಲ.
19:4b.2KI.019.004 ಒಂದು ವೇಳೆ ನಿನ್ನ ದೇವರಾದ ಕರ್ತನು, ಜೀವವುಳ್ಳ ದೇವ ರನ್ನು ನಿಂದಿಸಲು ತನ್ನ ಯಜಮಾನನಾದ ಅಶ್ಶೂರಿನ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ಮಾತುಗಳನ್ನು ಕೇಳಿ, ನಿನ್ನ ದೇವರಾದ ಕರ್ತನು ಕೇಳಿದ ಅವನ ಮಾತುಗಳಿಗೋಸ್ಕರ ಅವನನ್ನು ಗದರಿಸುವನು. ಆದ ದರಿಂದ ನೀನು ಉಳಿದವರಿಗೋಸ್ಕರ ಪ್ರಾರ್ಥನೆ ಸಲ್ಲಿಸಬೇಕು ಅಂದನು.
19:5b.2KI.019.005 ಹಾಗೆಯೇ ಅರಸನಾದ ಹಿಜ್ಕೀಯನ ಸೇವಕರು ಯೆಶಾಯನ ಬಳಿಗೆ ಬಂದರು.
19:6b.2KI.019.006 ಆಗ ಯೆಶಾಯನು ಅವರಿಗೆ -- ನೀವು ನಿಮ್ಮ ಯಜಮಾನನಿಗೆ ಹೇಳಬೇಕಾದದ್ದೇನಂದರೆ -- ನೀನು ಕೇಳಿದಂಥ, ಅಶ್ಶೂರಿನ ಅರಸನ ಸೇವಕರು ನನ್ನನ್ನು ದೂಷಿಸಿದಂಥ, ಮಾತುಗಳನ್ನು ನೀವು ಕೇಳಿದ್ದಕ್ಕೋಸ್ಕರ ಭಯಪಡಬೇಡಿರಿ.
19:7b.2KI.019.007 ಇಗೋ, ನಾನು ಅವನ ಮೇಲೆ ಗಾಳಿಯನ್ನು ಕಳುಹಿಸುವೆನು. ಅವನು ಒಂದು ಸುದ್ದಿ ಯನ್ನು ಕೇಳಿ ತನ್ನ ದೇಶಕ್ಕೆ ಹಿಂತಿರುಗುವನು. ಇದಲ್ಲದೆ ತನ್ನ ದೇಶದಲ್ಲಿ ಕತ್ತಿಯಿಂದ ಅವನನ್ನು ಬೀಳಮಾಡು ವೆನು ಎಂದು ಕರ್ತನು ಹೇಳುತ್ತಾನೆ ಅಂದನು.
19:8b.2KI.019.008 ರಬ್ಷಾಕೆಯು ತಿರಿಗಿ ಹೋಗುತ್ತಿರುವಾಗ ಲಿಬ್ನದ ಮೇಲೆ ಯುದ್ಧಮಾಡುತ್ತಿರುವ ಅಶ್ಶೂರಿನ ಅರಸನನ್ನು ಕಂಡುಕೊಂಡನು. ಲಾಕೀಷನ್ನು ಬಿಟ್ಟನೆಂದು ಕೇಳಿದ್ದನು.
19:9b.2KI.019.009 ಆಗ ಅವನು ಕೂಷಿನ ಅರಸನಾದ ತಿರ್ಹಾಕನನ್ನು ಕುರಿತು--ಇಗೋ, ಅವನು ನಿನ್ನ ಮೇಲೆ ಯುದ್ಧ ಮಾಡಲು ಹೊರಟಿದ್ದಾನೆಂದು ಕೇಳಿದಾಗ ತಿರಿಗಿ ಹಿಜ್ಕೀ ಯನ ಬಳಿಗೆ ಸೇವಕರನ್ನು ಕಳುಹಿಸಿ ಹೇಳಿದ್ದೇನಂದರೆ
19:10b.2KI.019.010 ನೀವು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇನಂದರೆ--ಯೆರೂಸಲೇಮು ಅಶ್ಶೂ ರಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲವೆಂದು ನೀನು ನಂಬಿರುವ ನಿನ್ನ ದೇವರು ನಿನ್ನನ್ನು ಮೋಸಗೊಳಿಸ ದಿರಲಿ.
19:11b.2KI.019.011 ಇಗೋ, ಅಶ್ಶೂರಿನ ಅರಸುಗಳು ಎಲ್ಲಾ ದೇಶಗಳನ್ನು ಶಾಪಕೊಟ್ಟು ನಿರ್ಮೂಲ ಮಾಡಿದ ವರ್ತ ಮಾನವನ್ನು ಕೇಳಿದಿ. ಆದರೆ ನೀನು ತಪ್ಪಿಸಿಕೊಳ್ಳು ವಿಯೋ?
19:12b.2KI.019.012 ನನ್ನ ತಂದೆಗಳು ಹಾಳು ಮಾಡಿದ ಗೋಜಾನ್, ಖಾರಾನ್, ರೆಚೆಫ್, ತೆಲಸ್ಸಾರ್‌ನಲ್ಲಿದ್ದ ಎದೆನಿನ ಮಕ್ಕಳು,
19:13b.2KI.019.013 ಈ ಜನಾಂಗಗಳ ದೇವರುಗಳು ಅವರನ್ನು ತಪ್ಪಿಸಿ ಬಿಟ್ಟರೋ? ಹಮಾತಿನ ಅರಸನೂ ಅರ್ಫಾದಿನ ಅರಸನೂ ಸೆಫರ್ವಯಿಮ್ ಪಟ್ಟಣದ, ಹೇನ, ಇವ್ವಾ ಅರಸನೂ ಎಲ್ಲಿ ಎಂಬದೇ.
19:14b.2KI.019.014 ಹಿಜ್ಕೀ ಯನು ಸೇವಕರ ಕೈಯಿಂದ ಪತ್ರವನ್ನು ತಕ್ಕೊಂಡು ಓದಿದಾಗ ಹಿಜ್ಕೀಯನು ಕರ್ತನ ಮನೆಗೆ ಹೋಗಿ ಅದನ್ನು ಕರ್ತನ ಮುಂದೆ ಹಾಸಿದನು.
19:15b.2KI.019.015 ಇದಲ್ಲದೆ ಹಿಜ್ಕೀಯನು ಕರ್ತನ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--ಕೆರೂಬಿಗಳ ಮಧ್ಯದಲ್ಲಿ ವಾಸ ವಾಗಿರುವ ಇಸ್ರಾಯೇಲಿನ ದೇವರಾದ ಕರ್ತನೇ, ನೀನೊಬ್ಬನೇ ಭೂಮಿಯ ಎಲ್ಲಾ ರಾಜ್ಯಗಳಿಗೆ ದೇವ ರಾಗಿದ್ದೀ.
19:16b.2KI.019.016 ನೀನೇ ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ್ದೀ. ಕರ್ತನೇ, ಕಿವಿ ಕೊಟ್ಟು ಕೇಳು; ಕರ್ತನೆ, ಕಣ್ಣುಗಳನ್ನು ತೆರೆದುನೋಡು. ಸನ್ಹೇರೀಬನು ಜೀವವುಳ್ಳ ದೇವರನ್ನು ನಿಂದಿಸಿ ಕಳುಹಿಸಿದ ಮಾತು ಗಳನ್ನು ಕೇಳು.
19:17b.2KI.019.017 ಕರ್ತನೇ, ನಿಶ್ಚಯವಾಗಿ ಅಶ್ಶೂರಿನ ಅರಸುಗಳು ಜನಾಂಗಗಳನ್ನೂ ಅವರ ದೇಶಗಳನ್ನೂ ಹಾಳು ಮಾಡಿ ಅವರ ದೇವರುಗಳನ್ನು ಬೆಂಕಿಯಲ್ಲಿ ಹಾಕಿದ್ದಾರೆ.
19:18b.2KI.019.018 ಅವು ದೇವರುಗಳಲ್ಲ, ಮನುಷ್ಯನ ಕೈಕೆಲಸವಾದ ಕಟ್ಟಿಗೆಯೂ ಕಲ್ಲೂ ಆಗಿದ್ದವು.
19:19b.2KI.019.019 ಆದದ ರಿಂದ ಅವರು ಅವುಗಳನ್ನು ನಾಶಮಾಡಿದ್ದಾರೆ. ಆದರೆ ಈಗ ನಮ್ಮ ದೇವರಾದ ಕರ್ತನೇ, ನೀನೊಬ್ಬನೇ ದೇವರಾದ ಕರ್ತನಾಗಿದ್ದೀ ಎಂದು ಭೂಮಿಯ ಎಲ್ಲಾ ರಾಜ್ಯಗಳೂ ತಿಳಿಯುವ ಹಾಗೆ ನಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸು ಎಂಬದೇ.
19:20b.2KI.019.020 ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನಂದರೆ--ಇಸ್ರಾ ಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಅಶ್ಶೂರಿನ ಅರಸನಾದ ಸನ್ಹೇರೀಬನನ್ನು ಕುರಿತು ನೀನು ನನಗೆ ಪ್ರಾರ್ಥನೆ ಮಾಡಿದ್ದನ್ನು ನಾನು ಕೇಳಿ ದ್ದೇನೆ. ಕರ್ತನು ಅವನನ್ನು ಕುರಿತು ಹೇಳಿದ ವಾಕ್ಯ ವೇನಂದರೆ--
19:21b.2KI.019.021 ಚೀಯೋನಿನ ಮಗಳಾದ ಕನ್ಯಾಸ್ತ್ರೀ ನಿನ್ನನ್ನು ಉದಾಸೀನ ಮಾಡಿ ನಿನಗೆ ಅಪಹಾಸ್ಯ ಮಾಡು ತ್ತಾಳೆ; ಯೆರೂಸಲೇಮಿನ ಕುಮಾರ್ತೆ ನಿನ್ನ ಹಿಂದೆ ತಲೆ ಅಲ್ಲಾಡಿಸುತ್ತಾಳೆ.
19:22b.2KI.019.022 ಯಾರನ್ನು ನಿಂದಿಸಿ ದೂಷಿ ಸಿದಿ? ಯಾರಿಗೆ ವಿರೋಧವಾಗಿ ಸ್ವರವನ್ನು ಎತ್ತಿ ನಿನ್ನ ಕಣ್ಣುಗಳನ್ನು ಮೇಲಕ್ಕೆ ಎತ್ತಿದಿ? ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾಗಿಯೇ.
19:23b.2KI.019.023 ನಿನ್ನ ಸೇವಕರ ಮುಖಾಂತರ ಕರ್ತನನ್ನು ನಿಂದಿಸಿ ಹೇಳಿದ್ದು--ನಾನು ನನ್ನ ಹೆಚ್ಚಾದ ರಥಗಳಿಂದ ಪರ್ವತಗಳ ಶಿಖರಕ್ಕೂ ಲೆಬನೋನಿನ ಪಾರ್ಶ್ವಗಳಿಗೂ ಹೋಗಿ ಅದರ ಉನ್ನತ ವಾದ ದೇವದಾರುಗಳನ್ನೂ ಅದರ ಮುಖ್ಯವಾದ ತುರಾಯಿ ಮರಗಳನ್ನೂ ಕಡಿದು ಅದರ ಅಂಚಿನ ಗಡಿ ಸ್ಥಳಗಳಲ್ಲಿಯೂ ಅದರ ಫಲವುಳ್ಳ ಅಡವಿಯ ಲ್ಲಿಯೂ ಸೇರುತ್ತೇನೆ.
19:24b.2KI.019.024 ನಾನು ಅಗೆದು ಅನ್ಯರ ನೀರನ್ನು ಕುಡಿದಿದ್ದೇನೆ; ನನ್ನ ಅಂಗಾಲುಗಳಿಂದ ಕೋಟೆ ಸ್ಥಳಗಳ ಪ್ರವಾಹಗಳನ್ನು ಬತ್ತಿಹೋಗುವಂತೆ ಮಾಡಿ ದ್ದೇನೆ.
19:25b.2KI.019.025 ನಾನು ಅದನ್ನು ಮಾಡಿದೆನೆಂದು ನೀನು ಬಹುಕಾಲದಿಂದಲೂ ನಾನು ಅದನ್ನು ನಿರೂಪಿಸಿದ್ದೇ ನೆಂದು ನೀನು ಪೂರ್ವದ ದಿವಸಗಳಿಂದಲೂ ಕೇಳ ಲಿಲ್ಲವೋ? ಈಗ ಅದನ್ನು ನಾನು ಅನುಭವಿಸುವಂತೆ ಮಾಡಿದ್ದೇನೆ, ನೀನು ಬಲವಾದ ಪಟ್ಟಣಗಳನ್ನು ಹಾಳಾದ ದಿಬ್ಬೆಗಳಾಗಿ ಮಾಡಿಬಿಡುವ ಹಾಗೆ ಇರು ವದೇ.
19:26b.2KI.019.026 ಆದದರಿಂದ ಅವುಗಳ ನಿವಾಸಿಗಳು ಬಲ ಹೀನರಾಗಿ ಹೆದರಿ ನಾಚಿಕೆಪಟ್ಟರು. ಹೊಲದ ಹುಲ್ಲಿನ ಹಾಗೆಯೂ ಹಸುರು ಪಲ್ಯದ ಹಾಗೆಯೂ ಮಾಳಿಗೆಗೆಳ ಮೇಲಿರುವ ಹುಲ್ಲಿನ ಹಾಗೆಯೂ ಬೆಳೆಯುವದಕ್ಕಿಂತ ಮುಂಚೆ ಬಾಡುವ ಪೈರಿನ ಹಾಗೆಯೂ ಇದ್ದರು.
19:27b.2KI.019.027 ನಿನ್ನ ಕೂತಿರುವಿಕೆಯನ್ನೂ ಹೊರಡುವಿಕೆಯನ್ನೂ ನಿನ್ನ ಬರುವಿಕೆಯನ್ನೂ ನೀನು ನನಗೆ ವಿರೋಧವಾಗಿ ಮಾಡುವ ರೌದ್ರವನ್ನೂ ನಾನು ಬಲ್ಲೆನು.
19:28b.2KI.019.028 ನೀನು ನನಗೆ ವಿರೋಧವಾಗಿ ಮಾಡುವ ನಿನ್ನ ರೌದ್ರವೂ ನಿನ್ನ ಅಹಂಕಾರವೂ ನನ್ನ ಕಿವಿಗಳಲ್ಲಿ ಬಂದದರಿಂದ ನಾನು ನನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ಬಾಯಲ್ಲಿಯೂ ಹಾಕಿ ನೀನು ಬಂದ ಮಾರ್ಗದಲ್ಲಿ ನಿನ್ನನ್ನು ಹಿಂತಿರುಗಿಸುವೆನು.
19:29b.2KI.019.029 ನಿನಗೆ ಗುರುತು ಇದೇ--ಈ ವರುಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ಎರಡನೇ ವರುಷದಲ್ಲಿ ಅದರಿಂದ ಮೊಳೆತದ್ದನ್ನೂ ತಿನ್ನುವಿರಿ; ಆದರೆ ಮೂರನೇ ವರುಷ ದಲ್ಲಿ ನೀವು ಬಿತ್ತಿ ಕೊಯ್ಯಿರಿ; ದ್ರಾಕ್ಷೇ ತೋಟಗಳನ್ನು ನೆಟ್ಟು ಅವುಗಳ ಫಲಗಳನ್ನು ತಿನ್ನಿರಿ.
19:30b.2KI.019.030 ಯೆಹೂದದ ಮನೆತನದಲ್ಲಿ ಉಳಿದು ತಪ್ಪಿಸಿಕೊಂಡವರು ತಿರಿಗಿ ಕೆಳಗೆ ಬೇರೂರಿ ಮೇಲಕ್ಕೆ ಫಲ ಬಿಡುವರು.
19:31b.2KI.019.031 ಯೆರೂ ಸಲೇಮಿನಿಂದ ಉಳಿದವರೂ ಚಿಯೋನ್ ಪರ್ವತ ದಿಂದ ತಪ್ಪಿಸಿಕೊಂಡವರೂ ಹೊರಡುವರು. ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ಮಾಡುವದು.
19:32b.2KI.019.032 ಆದ ದರಿಂದ ಕರ್ತನು ಅಶ್ಶೂರಿನ ಅರಸನನ್ನು ಕುರಿತು ಹೇಳುವದೇನಂದರೆ--ಅವನು ಈ ಪಟ್ಟಣದಲ್ಲಿ ಬರು ವದಿಲ್ಲ; ಅಲ್ಲಿ ಬಾಣವನ್ನು ಎಸೆಯುವದಿಲ್ಲ; ಗುರಾಣಿ ಹಿಡಿದುಕೊಂಡು ಅದರ ಮುಂದೆ ಸೇರುವದಿಲ್ಲ; ಅದಕ್ಕೆ ವಿರೋಧವಾಗಿ ದಿನ್ನೆಯನ್ನು ಹಾಕುವದಿಲ್ಲ.
19:33b.2KI.019.033 ಅವನು ಬಂದ ಮಾರ್ಗವಾಗಿಯೇ ತಿರಿಗಿ ಹೋಗುವನು; ಆದರೆ ಅವನು ಈ ಪಟ್ಟಣದಲ್ಲಿ ಬರುವದಿಲ್ಲವೆಂದು ಕರ್ತನು ಹೇಳುತ್ತಾನೆ.
19:34b.2KI.019.034 ನನ್ನ ನಿಮಿತ್ತವೂ ನನ್ನ ಸೇವಕನಾದ ದಾವೀದನ ನಿಮಿತ್ತವೂ ನಾನು ಈ ಪಟ್ಟಣವನ್ನು ಕಾಪಾಡಿ ಅದನ್ನು ರಕ್ಷಿಸುವೆನು ಎಂಬದೇ.
19:35b.2KI.019.035 ಅದೇ ರಾತ್ರಿಯಲ್ಲಿ ಏನಾಯಿತಂದರೆ, ಕರ್ತನ ದೂತನು ಹೊರಟು ಅಶ್ಶೂರಿನ ದಂಡಿನಲ್ಲಿ ಒಂದು ಲಕ್ಷ ಎಂಭತ್ತೈದು ಸಾವಿರ ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ ಇಗೋ, ಅವರೆಲ್ಲರೂ ಸತ್ತು ಹೆಣಗಳಾಗಿದ್ದರು.
19:36b.2KI.019.036 ಅಶ್ಶೂರಿನ ಅರಸನಾದ ಸನ್ಹೇರೀಬನು ಹಿಂತಿರುಗಿಹೋಗಿ ನಿನೆವೆಯಲ್ಲಿ ವಾಸ ವಾಗಿದ್ದನು.ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಆರಾಧಿಸುತ್ತಿರುವಾಗ ಅವನ ಮಕ್ಕಳಾದ ಅದ್ರಮ್ಮೆಲೆಕನೂ ಸರೆಚೆರನೂ ಅವನನ್ನು ಕತ್ತಿಯಿಂದ ಹೊಡೆದು ಅರರಾಟ್ ದೇಶಕ್ಕೆ ತಪ್ಪಿಸಿಕೊಂಡು ಹೋದರು. ಅವನ ಮಗನಾದ ಏಸರ್‌ಹದ್ದೋನನು ಅವನಿಗೆ ಬದಲಾಗಿ ಅರಸನಾದನು.
19:37b.2KI.019.037 ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಆರಾಧಿಸುತ್ತಿರುವಾಗ ಅವನ ಮಕ್ಕಳಾದ ಅದ್ರಮ್ಮೆಲೆಕನೂ ಸರೆಚೆರನೂ ಅವನನ್ನು ಕತ್ತಿಯಿಂದ ಹೊಡೆದು ಅರರಾಟ್ ದೇಶಕ್ಕೆ ತಪ್ಪಿಸಿಕೊಂಡು ಹೋದರು. ಅವನ ಮಗನಾದ ಏಸರ್‌ಹದ್ದೋನನು ಅವನಿಗೆ ಬದಲಾಗಿ ಅರಸನಾದನು.
20
20:1b.2KI.020.001 ಆ ದಿವಸಗಳಲ್ಲಿ ಹಿಜ್ಕೀಯನು ಮರಣಕರರೋಗದಲ್ಲಿ ಬಿದ್ದಿದ್ದನು. ಆಗ ಆಮೋಚನ ಮಗನಾದ ಪ್ರವಾದಿಯಾದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ--ನೀನು ನಿನ್ನ ಮನೆಯನ್ನು ವ್ಯವಸ್ಥೆ ಮಾಡಿಕೋ; ಯಾಕಂದರೆ ನೀನು ಬದುಕದೆ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು.
20:2b.2KI.020.002 ಆಗ ಅವನು ಗೋಡೆಯ ಕಡೆಗೆ ತನ್ನ ಮುಖವನ್ನು ತಿರುಗಿಸಿ ಕರ್ತನನ್ನು ಪ್ರಾರ್ಥಿಸಿ--
20:3b.2KI.020.003 ಓ ಕರ್ತನೇ, ನಾನು ಸತ್ಯದಿಂದಲೂ ಪೂರ್ಣಹೃದಯದಿಂದಲೂ ನಿನ್ನ ಮುಂದೆ ನಡೆದು ನಿನ್ನ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂದು ನೆನಸು ಅಂದನು. ಹಿಜ್ಕೀಯನು ಬಹಳವಾಗಿ ಅತ್ತನು.
20:4b.2KI.020.004 ಆದರೆ ಯೆಶಾಯನು ಆವರಣದ ಮಧ್ಯಕ್ಕೆ ಹೋಗುವ ಮುಂಚೆ ಕರ್ತನ ವಾಕ್ಯವು ಅವ ನಿಗೆ ಉಂಟಾಗಿ--
20:5b.2KI.020.005 ನೀನು ತಿರುಗಿಕೊಂಡು ನನ್ನ ಜನರ ನಾಯಕನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇ ನಂದರೆ--ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ಇಗೋ, ನಾನು ನಿನ್ನನ್ನು ಸ್ವಸ್ಥಮಾಡುತ್ತೇನೆ; ಮೂರನೇ ದಿವಸದಲ್ಲಿ ಕರ್ತನ ಮನೆಗೆ ಹೋಗುವಿ.
20:6b.2KI.020.006 ಇದಲ್ಲದೆ ನಾನು ನಿನ್ನ ಆಯುಷ್ಯಕ್ಕೆ ಹದಿನೈದು ವರುಷ ಹೆಚ್ಚಾಗಿ ಕೂಡಿ ಸುತ್ತೇನೆ; ನಿನ್ನನ್ನೂ ಈ ಪಟ್ಟಣವನ್ನೂ ಅಶ್ಶೂರಿನ ಅರಸನ ಕೈಗೆ ಬೀಳದಂತೆ ತಪ್ಪಿಸಿಬಿಡುವೆನು. ಈ ಪಟ್ಟಣವನ್ನು ನನ್ನ ನಿಮಿತ್ತವಾಗಿಯೂ ನನ್ನ ಸೇವಕನಾದ ದಾವೀದನ ನಿಮಿತ್ತವಾಗಿಯೂ ಕಾಪಾಡುವೆನೆಂದು ನಿನ್ನ ತಂದೆಯಾದ ದಾವೀದನ ದೇವರಾದ ಕರ್ತನು ಹೇಳು ತ್ತಾನೆ ಎಂಬದೇ.
20:7b.2KI.020.007 ಇದಲ್ಲದೆ ಯೆಶಾಯನು ಅಂಜೂರದ ಹಣ್ಣುಗಳ ಉಂಡೆಯನ್ನು ತಕ್ಕೊಂಡು ಬರ ಹೇಳಿದನು. ಅವರು ಹಾಗೆಯೇ ತಕ್ಕೊಂಡು ಹುಣ್ಣಿನ ಮೇಲೆ ಹಾಕಿದ್ದರಿಂದ ಅವನು ಗುಣ ಹೊಂದಿದನು.
20:8b.2KI.020.008 ಆದರೆ ಹಿಜ್ಕೀಯನು ಯೆಶಾಯನಿಗೆ--ಕರ್ತನು ನನ್ನನ್ನು ಸ್ವಸ್ಥ ಮಾಡುವನೆಂಬದಕ್ಕೂ ನಾನು ಮೂರನೇ ದಿವಸದಲ್ಲಿ ಕರ್ತನ ಮನೆಗೆ ಹೋಗುವೆನೆಂಬದಕ್ಕೂ ನನಗೆ ಗುರುತೇನು ಅಂದನು.
20:9b.2KI.020.009 ಆಗ ಯೆಶಾಯನು --ಕರ್ತನು, ತಾನು ಹೇಳಿದ ಕಾರ್ಯವನ್ನು ಮಾಡುವ ನೆಂಬದಕ್ಕೆ ಕರ್ತನ ಕಡೆಯಿಂದ ನಿನಗೆ ಉಂಟಾಗುವ ಗುರುತು ಇದೇ--ನೆರಳು ಹತ್ತು ಮೆಟ್ಟಲು ಮುಂದಕ್ಕೆ ಹೋಗಬೇಕೋ? ಇಲ್ಲವೆ ಹತ್ತು ಮೆಟ್ಟಲು ಹಿಂದಕ್ಕೆ ಹೋಗಬೇಕೋ ಎಂದು ಕೇಳಿದನು.
20:10b.2KI.020.010 ಅದಕ್ಕೆ ಹಿಜ್ಕೀ ಯನು--ನೆರಳು ಹತ್ತು ಮೆಟ್ಟಲು ಇಳಿಯುವದು ಅಲ್ಪವಾದದ್ದು; ಹಾಗಲ್ಲ, ನೆರಳು ಹತ್ತು ಮೆಟ್ಟಲು ಹಿಂದಕ್ಕೆ ತಿರುಗಲಿ ಅಂದನು.
20:11b.2KI.020.011 ಆಗ ಪ್ರವಾದಿಯಾದ ಯೆಶಾಯನು ಕರ್ತನಿಗೆ ಮೊರೆಯಿಟ್ಟದ್ದರಿಂದ ಅವನು ಆಹಾಜನ ಛಾಯಾಸ್ತಂಭದಲ್ಲಿ ಇಳಿದುಹೋದ ನೆರ ಳನ್ನು ಹತ್ತು ಮೆಟ್ಟಲು ಹಿಂದಕ್ಕೆ ಬರಮಾಡಿದನು.
20:12b.2KI.020.012 ಅದೇ ಕಾಲದಲ್ಲಿ ಬಾಬೆಲಿನ ಅರಸನಾದ ಬಲ ದಾನನ ಮಗನಾದ ಬೆರೋದಕಬಲದಾನನು, ಹಿಜ್ಕೀ ಯನು ರೋಗದಲ್ಲಿದ್ದು ಸ್ವಸ್ಥನಾದನೆಂದು ಕೇಳಿದ್ದರಿಂದ ಪತ್ರಗಳನ್ನೂ ಕಾಣಿಕೆಯನ್ನೂ ಹಿಜ್ಕೀಯನ ಬಳಿಗೆ ಕಳುಹಿಸಿದನು.
20:13b.2KI.020.013 ಹಿಜ್ಕೀಯನು ಅವರ ಮಾತು ಕೇಳಿ ತನ್ನ ಎಲ್ಲಾ ಭಂಡಾರದ ಮನೆಯನ್ನೂ ಬೆಳ್ಳಿಯನ್ನೂ ಬಂಗಾರವನ್ನೂ ಸುಗಂಧಗಳನ್ನೂ ಒಳ್ಳೇ ತೈಲವನ್ನೂ ತನ್ನ ಆಯುಧ ಶಾಲೆಯನ್ನೂ ತನ್ನ ಬೊಕ್ಕಸಗಳಲ್ಲಿ ಸಿಕ್ಕಿದ್ದೆಲ್ಲವನ್ನೂ ಅವರಿಗೆ ತೋರಿಸಿದನು. ತನ್ನ ಮನೆ ಯಲ್ಲಿಯೂ ತನ್ನ ಎಲ್ಲಾ ರಾಜ್ಯದಲ್ಲಿಯೂ ಅವರಿಗೆ ತೋರಿಸದೆ ಇದ್ದದ್ದು ಒಂದಾದರೂ ಇರಲಿಲ್ಲ.
20:14b.2KI.020.014 ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ--ಆ ಮನುಷ್ಯರು ಏನು ಹೇಳಿದರು? ಅವರು ಎಲ್ಲಿಂದ ನಿನ್ನ ಬಳಿಗೆ ಬಂದರು ಅಂದನು. ಹಿಜ್ಕೀಯನು--ಅವರು ದೂರ ದೇಶದಿಂದ ಅಂದರೆ ಬಾಬೆಲಿನಿಂದ ನನ್ನ ಬಳಿಗೆ ಬಂದಿದ್ದಾರೆ ಅಂದನು.
20:15b.2KI.020.015 ಅವನು--ನಿನ್ನ ಮನೆಯಲ್ಲಿ ಅವರು ಏನು ನೋಡಿದರು ಅಂದನು. ಹಿಜ್ಕೀಯನು--ನನ್ನ ಮನೆಯಲ್ಲಿ ಇದ್ದ ಎಲ್ಲವನ್ನೂ ಅವರು ನೋಡಿದ್ದಾರೆ; ನನ್ನ ಬೊಕ್ಕಸಗಳಲ್ಲಿ ನಾನು ಅವರಿಗೆ ತೋರಿಸದೆ ಇದ್ದದ್ದು ಒಂದಾದರೂ ಇಲ್ಲ ಅಂದನು.
20:16b.2KI.020.016 ಆಗ ಯೆಶಾಯನು ಹಿಜ್ಕೀಯನಿಗೆ--ಕರ್ತನ ವಾಕ್ಯವನ್ನು ಕೇಳು.
20:17b.2KI.020.017 ಇಗೋ, ದಿನಗಳು ಬರುವವು; ಆಗ ನಿನ್ನ ಮನೆಯಲ್ಲಿ ಇರುವದೆಲ್ಲವೂ ನಿನ್ನ ತಂದೆಗಳು ಇಂದಿನ ವರೆಗೂ ಸಂಪಾದಿಸಿ ಇಟ್ಟದ್ದದ್ದೆಲ್ಲವೂ ಬಾಬೆಲಿಗೆ ಒಯ್ಯ ಲ್ಪಡುವದು. ಒಂದೂ ಉಳಿಯುವದಿಲ್ಲವೆಂದು ಕರ್ತನು ಹೇಳುತ್ತಾನೆ;
20:18b.2KI.020.018 ನಿನ್ನಿಂದ ಹುಟ್ಟುವ ನಿನ್ನ ಮಕ್ಕಳಲ್ಲಿ ಕೆಲವರನ್ನು ತೆಗೆದುಕೊಂಡು ಹೋಗುವರು. ಅವರು ಬಾಬೆಲಿನ ಅರಸನ ಮನೆಯಲ್ಲಿ ಕಂಚುಕಿಯರಾಗಿರು ವರು ಅಂದನು.
20:19b.2KI.020.019 ಆಗ ಹಿಜ್ಕೀಯನು ಯೆಶಾಯನಿಗೆ ನೀನು ಹೇಳಿದ ಕರ್ತನ ವಾಕ್ಯವು ಉತ್ತಮವಾದದ್ದು ಅಂದನು. ಅವನು--ನನ್ನ ದಿವಸಗಳಲ್ಲಿ ಸಮಾಧಾ ನವೂ ಸತ್ಯವೂ ಇದ್ದರೆ ಅದು ಉತ್ತಮವಲ್ಲವೋ ಅಂದನು.
20:20b.2KI.020.020 ಹಿಜ್ಕೀಯನ ಇತರ ಕ್ರಿಯೆಗಳೂ ಅವನ ಎಲ್ಲಾ ಪರಾಕ್ರಮವೂ ಅವನು ಕೆರೆಯನ್ನೂ ನಾಲೆ ಯನ್ನೂ ಮಾಡಿಸಿ ಪಟ್ಟಣದಲ್ಲಿ ನೀರನ್ನು ಬರ ಮಾಡಿದ್ದೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? ಹಿಜ್ಕೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು;ಅವನ ಮಗನಾದ ಮನಸ್ಸೆಯು ಅವನಿಗೆ ಬದಲಾಗಿ ಅರಸ ನಾದನು.
20:21b.2KI.020.021 ಅವನ ಮಗನಾದ ಮನಸ್ಸೆಯು ಅವನಿಗೆ ಬದಲಾಗಿ ಅರಸ ನಾದನು.
21
21:1b.2KI.021.001 ಮನಸ್ಸೆಯು ಆಳಲು ಆರಂಭಿಸಿದಾಗ ಹನ್ನೆರಡು ವರುಷದವನಾಗಿದ್ದು ಅವನು ಐವತ್ತೈದು ವರುಷ ಯೆರೂಸಲೇಮಿನಲ್ಲಿ ಆಳಿದನು. ಅವನ ತಾಯಿಯ ಹೆಸರು ಹೆಫ್ಚಿಬಾ.
21:2b.2KI.021.002 ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯ ಜನಾಂಗಗಳ ಅಸಹ್ಯವಾದವುಗಳ ಹಾಗೆಯೇ ಅವನು ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದನು.
21:3b.2KI.021.003 ಅವನು ತನ್ನ ತಂದೆಯಾದ ಹಿಜ್ಕೀಯನು ನಾಶಮಾಡಿದ ಉನ್ನತ ಸ್ಥಳಗಳನ್ನು ತಿರಿಗಿ ಕಟ್ಟಿಸಿ ಬಾಳನಿಗೆ ಬಲಿಪೀಠ ಗಳನ್ನು ಉಂಟುಮಾಡಿ ಇಸ್ರಾಯೇಲಿನ ಅರಸನಾದ ಅಹಾಬನು ಮಾಡಿದ ಹಾಗೆ ವಿಗ್ರಹದ ತೋಪನ್ನು ಮಾಡಿ ಆಕಾಶದ ಎಲ್ಲಾ ಸೈನ್ಯಕ್ಕೆ ಅಡ್ಡಬಿದ್ದು ಅವುಗಳನ್ನು ಸೇವಿಸಿದನು.
21:4b.2KI.021.004 ಇದಲ್ಲದೆ ಯೆರೂಸಲೇಮಿನಲ್ಲಿ ನನ್ನ ನಾಮವನ್ನು ಇರಿಸುವೆನೆಂದು ಕರ್ತನು ಯಾವದನ್ನು ಕುರಿತು ಹೇಳಿದ್ದನೋ ಆ ಕರ್ತನ ಮನೆಯಲ್ಲಿ ಅವನು ಬಲಿಪೀಠಗಳನ್ನು ಕಟ್ಟಿಸಿದನು.
21:5b.2KI.021.005 ಕರ್ತನ ಮನೆಯ ಎರಡು ಅಂಗಳಗಳಲ್ಲಿ ಆಕಾಶದ ಎಲ್ಲಾ ಸೈನ್ಯಕ್ಕೋಸ್ಕರ ಬಲಿಪೀಠಗಳನ್ನು ಕಟ್ಟಿಸಿದನು.
21:6b.2KI.021.006 ಅವನು ತನ್ನ ಮಗನನ್ನು ಬೆಂಕಿಯಲ್ಲಿ ದಾಟುವಂತೆ ಮಾಡಿದನು; ಮೇಘ ಮಂತ್ರ ಗಳನ್ನೂ ಸರ್ಪಮಂತ್ರಗಳನ್ನೂ ಮಾಡಿದನು; ಯಕ್ಷಿಣಿ ಗಾರರ ಬಳಿಯಲ್ಲೂ ಮಂತ್ರಜ್ಞರ ಬಳಿಯಲ್ಲೂ ವಿಚಾರಿ ಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸಲು ಆತನ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿದನು.
21:7b.2KI.021.007 ಈ ಮನೆಯಲ್ಲಿಯೂ ಇಸ್ರಾಯೇಲಿನ ಸಕಲ ಗೋತ್ರಗಳ ಲ್ಲಿಯೂ ನಾನು ಆದುಕೊಂಡ ಯೆರೂಸಲೇಮಿನ ಲ್ಲಿಯೂ ನನ್ನ ನಾಮವನ್ನು ಯುಗಯುಗಕ್ಕೂ ಇರುವಂತೆ ಮಾಡುವೆನೆಂದು ಕರ್ತನು ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ ಯಾವದನ್ನು ಕುರಿತು ಹೇಳಿದ್ದನೋ ಆ ಮನೆಯಲ್ಲಿ ತಾನು ಮಾಡಿದ ತೋಪಿನ ಕೆತ್ತಿದ ವಿಗ್ರಹವನ್ನು ಇಟ್ಟನು.
21:8b.2KI.021.008 ಕರ್ತನು --ನಾನು ಅವರಿಗೆ ಆಜ್ಞಾಪಿಸಿದ ಎಲ್ಲಾದರ ಪ್ರಕಾರವೂ ನನ್ನ ಸೇವಕನಾದ ಮೋಶೆಯು ಅವರಿಗೆ ಆಜ್ಞಾಪಿಸಿದ ಎಲ್ಲಾ ನ್ಯಾಯಪ್ರಮಾಣದ ಪ್ರಕಾರವೂ ಮಾಡಿ ಅವುಗಳನ್ನು ಅವರು ಕೈಕೊಂಡರೆ ನಾನು ಅವರ ತಂದೆಗಳಿಗೆ ಕೊಟ್ಟ ದೇಶದೊಳಗಿಂದ ಅವರ ಪಾದಗಳು ಇನ್ನು ಕದಲುವಂತೆ ಮಾಡುವದಿಲ್ಲವೆಂದು ಹೇಳಿದನು.
21:9b.2KI.021.009 ಆದರೆ ಅವರು ಕೇಳದೆ ಹೋದರು; ಕರ್ತನು ಇಸ್ರಾಯೇಲ್ ಮಕ್ಕಳ ಮುಂದೆ ನಾಶಮಾಡಿದ ಜನಾಂಗಗಳ ಕೆಟ್ಟತನಕ್ಕಿಂತ ಅಧಿಕ ವಾಗಿ ಮಾಡಲು ಮನಸ್ಸೆಯು ಅವರನ್ನು ಮಾರ್ಗ ತಪ್ಪಿಸಿದನು.
21:10b.2KI.021.010 ಆದದರಿಂದ ಕರ್ತನು ಪ್ರವಾದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ್ದೇನಂದರೆ--
21:11b.2KI.021.011 ಯೆಹೂದದ ಅರಸನಾದ ಮನಸ್ಸೆಯು ತನ್ನ ಮುಂದೆ ಇದ್ದ ಅಮೋರಿಯರು ಮಾಡಿದ ಎಲ್ಲಕ್ಕಿಂತ ಕೆಟ್ಟದ್ದಾದ ಈ ಅಸಹ್ಯಗಳನ್ನು ಮಾಡಿದನು. ಯೆಹೂದವನ್ನು ತನ್ನ ವಿಗ್ರಹಗಳಿಂದ ಪಾಪಮಾಡಿಸಿದನು. ಈ ಕಾರಣ ದಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳು ವದೇನಂದರೆ--
21:12b.2KI.021.012 ಇಗೋ, ನಾನು ಯೆರೂಸಲೇಮಿನ ಮೇಲೆಯೂ ಯೆಹೂದದ ಮೇಲೆಯೂ ಕೇಡನ್ನು ಬರಮಾಡುವೆನು; ಅದನ್ನು ಕೇಳುವವನ ಎರಡೂ ಕಿವಿಗಳು ಕಿರಗುಟ್ಟುವವು.
21:13b.2KI.021.013 ನಾನು ಯೆರೂಸಲೇಮಿನ ಮೇಲೆ ಸಮಾರ್ಯದ ನೂಲನ್ನೂ ಅಹಾಬನ ಮನೆಯ ಗಟ್ಟಿ ತೂಕವನ್ನೂ ಗುಂಡನ್ನೂ ಚಾಚುವೆನು; ತಟ್ಟೆ ಯನ್ನು ಒರಸಿ ಬೋರಲು ಹಾಕುವ ಹಾಗೆ ನಾನು ಯೆರೂಸಲೇಮನ್ನು ಒರಸಿಬಿಡುವೆನು.
21:14b.2KI.021.014 ಇದಲ್ಲದೆ ನಾನು ನನ್ನ ಬಾಧ್ಯತೆಗೆ ಉಳಿದಿರುವವರನ್ನು ಬಿಟ್ಟು ಬಿಟ್ಟು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿಬಿಡುವೆನು. ಅವರು ತಮ್ಮ ಶತ್ರುಗಳಿಗೆ ಕೊಳ್ಳೆಯೂ ಸೂರೆಯೂ ಆಗಿ ಹೋಗುವರು.
21:15b.2KI.021.015 ಅವರ ತಂದೆಗಳು ಐಗುಪ್ತ ದಿಂದ ಹೊರಟ ದಿವಸ ಮೊದಲುಗೊಂಡು ಇಂದಿನ ವರೆಗೂ ಅವರು ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿ ನನಗೆ ಕೋಪವನ್ನು ಎಬ್ಬಿಸಿದ್ದಾರೆ.
21:16b.2KI.021.016 ಇದಲ್ಲದೆ ಮನಸ್ಸೆಯು ಕರ್ತನ ದೃಷ್ಟಿಯಲ್ಲಿ ಕೇಡನ್ನು ಮಾಡಿದ್ದರಲ್ಲಿ ಯೆಹೂದವು ಪಾಪವನ್ನು ಮಾಡಲು ಪ್ರೇರೇಪಿಸಿದ ತನ್ನ ಪಾಪದ ಹೊರತು ಅವನು ಯೆರೂಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯ ವರೆಗೂ ತಾನು ಬಹು ಹೆಚ್ಚಾಗಿ ಚೆಲ್ಲಿದ ನಿರಾಪರಾಧದ ರಕ್ತದಿಂದ ತುಂಬಿಸಿದನು.
21:17b.2KI.021.017 ಮನಸ್ಸೆಯ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಅವನು ಮಾಡಿದ ಪಾಪವೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
21:18b.2KI.021.018 ಮನಸ್ಸೆಯು ತನ್ನ ಪಿತೃಗಳ ಸಂಗಡ ನಿದ್ರಿಸಿದನು ಅವನನ್ನು ಅವನ ಮನೆಯ ತೋಟವಾದ ಉಜ್ಜನ ತೋಟದಲ್ಲಿ ಹೂಣಿ ಟ್ಟರು. ಅವನ ಮಗನಾದ ಆಮೋನನು ಅವನಿಗೆ ಬದಲಾಗಿ ಅರಸನಾದನು.
21:19b.2KI.021.019 ಆಮೋನನು ಆಳಲು ಆರಂಭಿಸಿದಾಗ ಇಪ್ಪತ್ತೆ ರಡು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಎರಡು ವರುಷ ಆಳಿದನು. ಅವನ ತಾಯಿಯೂ ಯೊಟ್ಬಾ ಊರಿನವನಾದ ಹಾರೂಚನ ಮಗಳಾದ ಮೆಷುಲ್ಲೆ ಮೆತ್ ಎಂಬ ಹೆಸರುಳ್ಳವಳು.
21:20b.2KI.021.020 ಅವನು ತನ್ನ ತಂದೆ ಯಾದ ಮನಸ್ಸೆಯು ಮಾಡಿದ ಹಾಗೆ ಕರ್ತನ ದೃಷ್ಟಿ ಯಲ್ಲಿ ಕೆಟ್ಟದ್ದನ್ನು ಮಾಡಿದನು.
21:21b.2KI.021.021 ಅವನು ತನ್ನ ಪಿತೃಗಳ ದೇವರಾದ ಕರ್ತನ ಮಾರ್ಗವನ್ನು ಬಿಟ್ಟು
21:22b.2KI.021.022 ತನ್ನ ತಂದೆಯು ನಡೆದ ಎಲ್ಲಾ ಮಾರ್ಗದಲ್ಲಿ ನಡೆದು ತನ್ನ ತಂದೆಯು ಸೇವಿಸಿದ ವಿಗ್ರಹಗಳನ್ನು ತಾನೂ ಸೇವಿಸಿ ಅವುಗಳನ್ನು ಆರಾಧಿಸಿದನು.
21:23b.2KI.021.023 ಆದರೆ ಆಮೋನನ ಸೇವಕರು ಅವನ ಮೇಲೆ ಒಳಸಂಚು ಮಾಡಿ ಅರಸ ನನ್ನು ಅವನ ಮನೆಯಲ್ಲಿಯೇ ಕೊಂದುಹಾಕಿದರು.
21:24b.2KI.021.024 ದೇಶದ ಜನರು ಅರಸನಾದ ಆಮೋನನ ಮೇಲೆ ಒಳಸಂಚು ಮಾಡಿದ ಎಲ್ಲರನ್ನು ಸಂಹರಿಸಿ ಅವನ ಮಗನಾದ ಯೋಷೀಯನನ್ನು ಅವನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು.
21:25b.2KI.021.025 ಆಮೋನನು ಮಾಡಿದ ಅವನ ಇತರ ಕ್ರಿಯೆಗಳು ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?ಅವನ ಶವವನ್ನು ಉಜ್ಜನ ತೋಟದಲ್ಲಿದ್ದ ಸಮಾಧಿ ಯಲ್ಲಿ ಹೂಣಿಟ್ಟರು. ಅವನ ಮಗನಾದ ಯೋಷೀ ಯನು ಅವನಿಗೆ ಬದಲಾಗಿ ಅರಸನಾದನು.
21:26b.2KI.021.026 ಅವನ ಶವವನ್ನು ಉಜ್ಜನ ತೋಟದಲ್ಲಿದ್ದ ಸಮಾಧಿ ಯಲ್ಲಿ ಹೂಣಿಟ್ಟರು. ಅವನ ಮಗನಾದ ಯೋಷೀ ಯನು ಅವನಿಗೆ ಬದಲಾಗಿ ಅರಸನಾದನು.
22
22:1b.2KI.022.001 ಯೋಷೀಯನು ಆಳಲು ಆರಂಭಿಸಿದಾಗ ಎಂಟು ವರುಷದವನಾಗಿದ್ದು ಮೂವ ತ್ತೊಂದು ವರುಷ ಯೆರೂಸಲೇಮಿನಲ್ಲಿ ಆಳಿದನು. ಅವನ ತಾಯಿ ಬೊಚ್ಕತೂರಿನ ಅದಾಯನ ಮಗಳಾ ಗಿದ್ದು, ಯೆದೀದಾಳೆಂಬ ಹೆಸರುಳ್ಳವಳಾಗಿದ್ದಳು.
22:2b.2KI.022.002 ಅವನು ಕರ್ತನ ದೃಷ್ಟಿಗೆ ಒಳ್ಳೆಯದ್ದನ್ನು ಮಾಡಿ ತನ್ನ ತಂದೆಯಾದ ದಾವೀದನ ಎಲ್ಲಾ ಮಾರ್ಗಗಳಲ್ಲಿ ಬಲ, ಎಡ ಪಾರ್ಶ್ವವಾಗಿ ತಿರುಗದೆ ನಡೆದನು.
22:3b.2KI.022.003 ಅರಸನಾದ ಯೋಷೀಯನ ಆಳ್ವಿಕೆಯ ಹದಿನೆಂಟನೇ ವರುಷದಲ್ಲಿ ಏನಾಯಿತಂದರೆ, ಅರಸನು ಲೇಖಕನಾದ ಮೆಷುಲ್ಲಾ ಮನ ಮಗನಾದ ಅಚಲ್ಯನ ಮಗನಾದ ಶಾಫಾನನನ್ನು ಕರ್ತನ ಮನೆಗೆ ಕಳುಹಿಸಿ ಹೇಳಿದ್ದೇನಂದರೆ--
22:4b.2KI.022.004 ನೀನು ಪ್ರಧಾನ ಯಾಜಕನಾದ ಹಿಲ್ಕೀಯನ ಬಳಿಗೆ ಹೋಗು, ಅವನು ಕರ್ತನ ಮನೆಯಲ್ಲಿ ದ್ವಾರಪಾಲಕರು ಜನರಿಂದ ತೆಗೆದುಕೊಂಡು ಕೂಡಿಸಿದ ಹಣವನ್ನು ಲೆಕ್ಕ ಮಾಡಲಿ.
22:5b.2KI.022.005 ಅವರು ಅದನ್ನು ಕರ್ತನ ಮನೆಯ ಕೆಲಸಮಾಡು ವವರ ಮೇಲೆ ಇರುವ ಕಾವಲುಗಾರರ ಕೈಯಲ್ಲಿ ಒಪ್ಪಿಸಲಿ.
22:6b.2KI.022.006 ಮನೆ ದುರಸ್ತುಮಾಡುವ ಹಾಗೆ ಕರ್ತನ ಮನೆಯಲ್ಲಿ ಕೆಲಸ ಮಾಡುವವರಾದ ಬಡಿಗೆಯವ ರಿಗೂ ಶಿಲ್ಪಿಗಾರರಿಗೂ ಕಲ್ಲು ಕೆಲಸದವರಿಗೂ ಕೊಟ್ಟು ಮನೆಯನ್ನು ದುರಸ್ತು ಮಾಡಲು ಮರಗಳನ್ನೂ ಕೆತ್ತಿದ ಕಲ್ಲುಗಳನ್ನೂ ಕೊಂಡುಕೊಳ್ಳುವದಕ್ಕೆ ಕೊಡಲಿ.
22:7b.2KI.022.007 ಆದರೆ ಅವರು ನಂಬಿಗಸ್ತರಾಗಿ ಕೆಲಸಮಾಡಿದ್ದರಿಂದ ಅವರ ಕೈಗೆ ಒಪ್ಪಿಸಿದ ಹಣವನ್ನು ಕುರಿತು ಅವರಿಂದ ಲೆಕ್ಕ ಕೇಳಲಿಲ್ಲ.
22:8b.2KI.022.008 ಆಗ ಪ್ರಧಾನ ಯಾಜಕನಾದ ಹಿಲ್ಕೀಯನು ಲೇಖಕ ನಾದ ಶಾಫಾನನಿಗೆ--ನಾನು ಕರ್ತನ ಮನೆಯಲ್ಲಿ ನ್ಯಾಯಪ್ರಮಾಣದ ಪುಸ್ತಕವನ್ನು ಕಂಡುಕೊಂಡಿದ್ದೇನೆ ಅಂದನು; ಹಿಲ್ಕೀಯನು ಆ ಪುಸ್ತಕವನ್ನು ಶಾಫಾನನಿಗೆ ಕೊಟ್ಟನು; ಅವನು ಅದನ್ನು ಓದಿದನು.
22:9b.2KI.022.009 ಲೇಖಕನಾದ ಶಾಫಾನನು ಅರಸನ ಬಳಿಗೆ ಬಂದು ಅರಸನಿಗೆಕರ್ತನ ಮನೆಯಲ್ಲಿ ದೊರಕಿದ ಹಣವನ್ನು ನಿನ್ನ ಸೇವಕರು ಕೂಡಿಸಿ ಕರ್ತನ ಆಲಯದ ಕೆಲಸ ಮಾಡು ವವರ ಮೇಲಿರುವ ಕೆಲಸಗಾರರ ಕೈಯಲ್ಲಿ ಒಪ್ಪಿಸಿದ್ದಾರೆ ಅಂದನು.
22:10b.2KI.022.010 ಇದಲ್ಲದೆ ಲೇಖಕನಾದ ಶಾಫಾನನು ಅರಸನಿಗೆ--ಯಾಜಕನಾದ ಹಿಲ್ಕೀಯನು ನನಗೆ ಪುಸ್ತಕವನ್ನು ಒಪ್ಪಿಸಿದ್ದಾನೆಂದು ತೋರಿಸಿದನು; ಶಾಫಾ ನನು ಅದನ್ನು ಅರಸನ ಮುಂದೆ ಓದಿದನು.
22:11b.2KI.022.011 ಅರಸನು ನ್ಯಾಯಪ್ರಮಾಣದ ಪುಸ್ತಕದ ಮಾತು ಗಳನ್ನು ಕೇಳಿದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡನು.
22:12b.2KI.022.012 ಇದಲ್ಲದೆ ಅರಸನು ಯಾಜಕನಾದ ಹಿಲ್ಕೀಯನಿಗೂ ಶಾಫಾನನ ಮಗನಾದ ಅಹೀಕಾಮ್‌ನಿಗೂ ವಿಾಕಾ ಯನ ಮಗನಾದ ಅಕ್ಬೋರ್‌ನಿಗೂ ಲೇಖಕನಾದ ಶಾಫಾನನಿಗೂ ಅರಸನ ಸೇವಕನಾದ ಅಸಾಯನಿಗೂ ಆಜ್ಞಾಪಿಸಿ ಹೇಳಿದ್ದೇನಂದರೆ--
22:13b.2KI.022.013 ನೀವು ಹೋಗಿ ಸಿಕ್ಕಿದ ಈ ಪುಸ್ತಕದ ಮಾತುಗಳನ್ನು ಕುರಿತು ನನಗೋಸ್ಕರವೂ ಜನರಿಗೋಸ್ಕರವೂ ಎಲ್ಲಾ ಯೆಹೂದ್ಯರಿಗೋಸ್ಕರವೂ ಕರ್ತನ ಬಳಿಯಲ್ಲಿ ವಿಚಾರಿಸಿರಿ. ಯಾಕಂದರೆ ನಮ್ಮನ್ನು ಕುರಿತು ಬರೆಯಲ್ಪಟ್ಟ ಎಲ್ಲಾದರ ಪ್ರಕಾರ ಮಾಡಲು ನಮ್ಮ ಪಿತೃಗಳು ಈ ಪುಸ್ತಕದ ಮಾತುಗಳನ್ನು ಕೇಳದೆ ಹೋದದರಿಂದ ನಮಗೆ ವಿರೋಧವಾಗಿ ಉರಿ ಯುವ ದೇವರ ಕೋಪವು ದೊಡ್ಡದಾಗಿದೆ ಅಂದನು.
22:14b.2KI.022.014 ಹಾಗೆಯೇ ಯಾಜಕನಾದ ಹಿಲ್ಕೀಯನೂ ಅಹೀಕಾ ಮನೂ ಅಕ್ಬೋರನೂ ಶಾಫಾನನೂ ಅಸಾಯನೂ ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ಆದ ವಸ್ತ್ರಗಳ ಕೆಲಸಗಾರರಾದ ಶಲ್ಲೂಮನ ಹೆಂಡತಿಯಾದ ಪ್ರವಾದಿನಿಯಾದ ಹುಲ್ದಳ ಬಳಿಗೆ ಹೋಗಿ ಅವಳ ಸಂಗಡ ಮಾತನಾಡಿದರು. ಅವಳು ಯೆರೂಸಲೇಮಿ ನೊಳಗೆ ಎರಡನೇ ಭಾಗದಲ್ಲಿ ವಾಸವಾಗಿದ್ದಳು.
22:15b.2KI.022.015 ಆಗ ಅವಳು--ಅವರಿಗೆ ಹೇಳಿದ್ದು--ಇಸ್ರಾಯೇಲಿನ ದೇವ ರಾದ ಕರ್ತನು ಹೇಳುವದೇನಂದರೆ--ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದವನಿಗೆ ನೀವು ಹೇಳಬೇಕಾದದ್ದು ಇದೇ--ಇಗೋ, ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಕೇಡನ್ನು
22:16b.2KI.022.016 ಅಂದರೆ ಯೆಹೂದದ ಅರಸನು ಓದಿದ ಪುಸ್ತಕದ ಮಾತುಗ ಳನ್ನೆಲ್ಲಾ ಬರಮಾಡುವೆನು.
22:17b.2KI.022.017 ಅವರು ತಮ್ಮ ಎಲ್ಲಾ ಕೈ ಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸುವ ಹಾಗೆ ನನ್ನನ್ನು ಬಿಟ್ಟು ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ನನ್ನ ಕೋಪ ಈ ಸ್ಥಳದ ಮೇಲೆ ಹೊತ್ತಿ ಉರಿಯುವದು, ಆರಿಹೋಗದು ಎಂದು ಕರ್ತನು ಹೇಳುತ್ತಾನೆ.
22:18b.2KI.022.018 ಆದರೆ ಕರ್ತನಿಂದ ವಿಚಾರಿಸಲು ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದು ಇದೇ--ನೀವು ಕೇಳಿದ ಮಾತು ಗಳನ್ನು ಕುರಿತು ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ --
22:19b.2KI.022.019 ಈ ಸ್ಥಳಕ್ಕೂ ಅದರ ನಿವಾಸಿಗಳಿಗೂ ವಿರೋಧವಾಗಿ ಅವರು ನಾಶವೂ ಶಾಪವೂ ಆಗುವದೆಂದು ನಾನು ಹೇಳಿದ್ದನ್ನು ನೀನು ಕೇಳಿದಾಗ ನಿನ್ನ ಹೃದಯವು ಮೆತ್ತಗಾಗಿ ನೀನು ನಿನ್ನನ್ನು ಕರ್ತನ ಮುಂದೆ ತಗ್ಗಿಸಿ ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಮುಂದೆ ಅತ್ತದ್ದನ್ನು ನಾನೇ ಕೇಳಿದ್ದೇನೆಂದು ಕರ್ತನು ಹೇಳುತ್ತಾನೆ.ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವಿ; ನಾನು ಈ ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವದಿಲ್ಲ ಎಂಬದು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ತಿಳಿಸಿದರು.
22:20b.2KI.022.020 ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವಿ; ನಾನು ಈ ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವದಿಲ್ಲ ಎಂಬದು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ತಿಳಿಸಿದರು.
23
23:1b.2KI.023.001 ಅರಸನು ಹೇಳಿಕಳುಹಿಸಿದ್ದರಿಂದ ಯೆಹೂದದ, ಯೆರೂಸಲೇಮಿನ, ಹಿರಿಯರೆಲ್ಲ ರನ್ನು ಅವನ ಬಳಿಗೆ ಕೂಡಿಸಿದರು.
23:2b.2KI.023.002 ಆಗ ಅರಸನೂ ಅವನ ಸಂಗಡ ಯೆಹೂದದ ಜನರೆಲ್ಲರೂ ಯೆರೂ ಸಲೇಮಿನ ನಿವಾಸಿಗಳೆಲ್ಲರೂ ಯಾಜಕರೂ ಪ್ರವಾದಿ ಗಳೂ ಹಿರಿಕಿರಿಯರಾದ ಎಲ್ಲಾ ಜನರೂ ಕರ್ತನ ಆಲಯಕ್ಕೆ ಹೋದರು. ಅವರು ಕೇಳುವ ಹಾಗೆ ಕರ್ತನ ಆಲಯದಲ್ಲಿ ಸಿಕ್ಕಿದ ಒಡಂಬಡಿಕೆಯ ಪುಸ್ತಕದ ಮಾತುಗಳನೆಲ್ಲಾ ಅವನು ಓದಿದನು.
23:3b.2KI.023.003 ಅರಸನು ಸ್ತಂಭದ ಬಳಿಯಲ್ಲಿ ನಿಂತು ಕರ್ತನನ್ನು ಹಿಂಬಾಲಿಸು ವದಕ್ಕೂ ಆತನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆ ಗಳನ್ನೂ ಪೂರ್ಣಹೃದಯದಿಂದಲೂ ಪೂರ್ಣಪ್ರಾಣ ದಿಂದಲೂ ಕೈಕೊಳ್ಳುವದಕ್ಕೂ ಈ ಪುಸ್ತಕದಲ್ಲಿ ಬರೆದಿ ರುವ ಒಡಂಬಡಿಕೆಯ ವಾಕ್ಯಗಳನ್ನು ಸ್ಥಿರಪಡಿಸುವ ದಕ್ಕೂ ಕರ್ತನ ಮುಂದೆ ಒಡಂಬಡಿಕೆಯನ್ನು ಮಾಡಿ ದನು; ಜನರೆಲ್ಲರೂ ಒಡಂಬಡಿಕೆಗೆ ಒಪ್ಪಿದರು.
23:4b.2KI.023.004 ಅರ ಸನು--ಬಾಳನಿಗೋಸ್ಕರವೂ ವಿಗ್ರಹದ ತೋಪುಗಳಿ ಗೋಸ್ಕರವೂ ಆಕಾಶದ ಸೈನ್ಯಕ್ಕೋಸ್ಕರವೂ ಮಾಡ ಲ್ಪಟ್ಟಿದ್ದ ಎಲ್ಲಾ ಪಾತ್ರೆಗಳನ್ನು ಕರ್ತನ ಆಲಯದಿಂದ ಹೊರಗೆ ತಕ್ಕೊಂಡು ಬರಬೇಕೆಂದು ಪ್ರಧಾನ ಯಾಜಕ ನಾದ ಹಿಲ್ಕೀಯನಿಗೂ ಎರಡನೇ ತರಗತಿಯ ಯಾಜಕ ರಿಗೂ ದ್ವಾರಪಾಲಕರಿಗೂ ಆಜ್ಞಾಪಿಸಿದನು ಮತ್ತು ಅವನು ಅವುಗಳನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಹೊಲಗಳಲ್ಲಿ ಸುಡಿಸಿ ಅವುಗಳ ಬೂದಿ ಯನ್ನು ಬೇತೇಲಿಗೆ ತರುವಂತೆ ಮಾಡಿದನು.
23:5b.2KI.023.005 ಇದಲ್ಲದೆ ಯೆಹೂದದ ಪಟ್ಟಣಗಳಲ್ಲಿರುವ ಉನ್ನತ ಸ್ಥಳಗಳ ಲ್ಲಿಯೂ ಯೆರೂಸಲೇಮಿನ ಸುತ್ತಲಿರುವ ಉನ್ನತ ಸ್ಥಳಗಳಲ್ಲಿಯೂ ಧೂಪವನ್ನು ಸುಡಲು ಯೆಹೂದದ ಅರಸುಗಳು ನೇಮಿಸಿದ್ದ ಪೂಜಾರಿಗಳನ್ನೂ ಬಾಳನಿಗೂ ಸೂರ್ಯನಿಗೂ ಚಂದ್ರನಿಗೂ ಹನ್ನೆರಡು ರಾಶಿಗಳಿಗೂ ಆಕಾಶದ ಎಲ್ಲಾ ಸೈನ್ಯಕ್ಕೂ ಧೂಪಸುಡುವವರಾರೂ ಇರದ ಹಾಗೆ ಮಾಡಿದನು.
23:6b.2KI.023.006 ಕರ್ತನ ಆಲಯದೊ ಳಗಿಂದ ವಿಗ್ರಹದ ತೋಪನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಹಳ್ಳಕ್ಕೆ ಅದನ್ನು ತರಿಸಿ ಅವನು ಕಿದ್ರೋನ್ ಹಳ್ಳದ ಬಳಿಯಲ್ಲಿ ಸುಟ್ಟು ಧೂಳಾಗಿ ಪುಡಿಮಾಡಿ ಆ ಧೂಳಿನ ಪುಡಿಯನ್ನು ಜನರ ಸಮಾಧಿ ಗಳ ಮೇಲೆ ಹಾಕಿಸಿದನು.
23:7b.2KI.023.007 ಸ್ತ್ರೀಯರು ವಿಗ್ರಹದ ತೋಪಿಗೋಸ್ಕರ ಮನೆಗಳನ್ನು ನೇಯುತ್ತಿದ್ದ ಕಡೆಯಲ್ಲಿ ಕರ್ತನ ಮನೆಯ ಬಳಿಯಲ್ಲಿ ಇದ್ದ ಪುರುಷ ಸಂಗಮರ ಮನೆಗಳನ್ನು ಕೆಡವಿಸಿದನು.
23:8b.2KI.023.008 ಇದಲ್ಲದೆ ಅವನು ಯೆಹೂದದ ಪಟ್ಟಣಗಳಿಂದ ಯಾಜಕರೆಲ್ಲರನ್ನು ಬರ ಮಾಡಿ ಗೆಬ ಮೊದಲುಗೊಂಡು ಬೇರ್ಷೆಬದ ವರೆಗೂ ಯಾಜಕರು ಧೂಪ ಸುಡುತ್ತಿದ್ದ ಉನ್ನತ ಸ್ಥಳಗಳನ್ನು ಹೊಲೆಮಾಡಿ ಪಟ್ಟಣದ ಬಾಗಲಿನ ಎಡಪಾರ್ಶ್ವದಲ್ಲಿದ್ದ ಪಟ್ಟಣದ ಅಧಿಪತಿಯಾದ ಯೆಹೋಶುವನ ಬಾಗಲಿನ ದ್ವಾರದಲ್ಲಿದ್ದ ಬಾಗಲುಗಳ ಉನ್ನತ ಸ್ಥಳಗಳನ್ನು ಕೆಡವಿ ಹಾಕಿದನು.
23:9b.2KI.023.009 ಆದರೆ ಉನ್ನತ ಸ್ಥಳಗಳ ಯಾಜಕರು ಯೆರೂಸಲೇಮಿನಲ್ಲಿರುವ ಕರ್ತನ ಬಲಿಪೀಠದ ಬಳಿ ಯಲ್ಲಿ ಸೇರದೆ ತಮ್ಮ ಸಹೋದರರ ಮಧ್ಯದಲ್ಲಿ ಹುಳಿ ಇಲ್ಲದ ರೊಟ್ಟಿಯನ್ನು ತಿನ್ನುತ್ತಾ ಇದ್ದರು.
23:10b.2KI.023.010 ಯಾವನೂ ತನ್ನ ಮಗನನ್ನಾದರೂ ಮಗಳನ್ನಾದರೂ ಮೋಲೆಕನಿ ಗೋಸ್ಕರ ಬೆಂಕಿದಾಟಿಸದ ಹಾಗೆ ಹಿನ್ನೋಮನ ಮಕ್ಕಳ ತಗ್ಗಿನಲ್ಲಿದ್ದ ತೋಫೆತನ್ನು ಹೊಲೆಮಾಡಿದನು.
23:11b.2KI.023.011 ಬೈಲ ಲ್ಲಿರುವ ಪ್ರಧಾನನಾದ ನಾತಾನ್ ಮೆಲೆಕನ ಕೊಠಡಿಯ ಹತ್ತಿರ ಇದ್ದ ಕರ್ತನ ಮನೆಯ ದ್ವಾರದ ಬಳಿಯಲ್ಲಿ ಯೆಹೂದದ ಅರಸುಗಳು ಸೂರ್ಯನಿಗೆ ಕೊಟ್ಟ ಕುದುರೆ ಗಳನ್ನು ತೆಗೆದುಹಾಕಿ ಸೂರ್ಯನ ರಥಗಳನ್ನು ಬೆಂಕಿ ಯಿಂದ ಸುಟ್ಟುಬಿಟ್ಟನು.
23:12b.2KI.023.012 ಯೆಹೂದದ ಅರಸರು ಉಂಟು ಮಾಡಿದ ಆಹಾಜನ ಮೇಲು ಮಾಳಿಗೆಯ ಮೇಲೆ ಇದ್ದ ಬಲಿಪೀಠಗಳನ್ನೂ ಮನಸ್ಸೆಯು ಕರ್ತನ ಮನೆಯ ಎರಡು ಅಂಗಳಗಳಲ್ಲಿ ಮಾಡಿದ ಬಲಿಪೀಠ ಗಳನ್ನೂ ಅರಸನು ಕೆಡವಿಸಿ ಅಲ್ಲಿಂದ ಅದರ ಧೂಳನ್ನು ಕಿದ್ರೋನ್ ಹಳ್ಳದಲ್ಲಿ ಹಾಕಿಸಿದನು.
23:13b.2KI.023.013 ಇದಲ್ಲದೆ ಯೆರೂಸಲೇಮಿನ ಮುಂದೆ ಮೋಸದ ಬೆಟ್ಟದ ಬಲ ಪಾರ್ಶ್ವದಲ್ಲಿದ್ದ ಚೀದೋನ್ಯರ ಅಸಹ್ಯಕರವಾದ ಅಷ್ಟೋ ರೆತಿಗೂ ಮೋವಾಬ್ಯರ ಅಸಹ್ಯಕರವಾದ ಕೆಮೋಷ ನಿಗೂ ಅಮ್ಮೋನಿನ ಮಕ್ಕಳ ಅಸಹ್ಯಕರವಾದ ಮಿಲ್ಕೋ ಮ್‌ನಿಗೂ ಇಸ್ರಾಯೇಲಿನ ಅರಸನಾದ ಸೊಲೊ ಮೋನನು ಕಟ್ಟಿಸಿದ ಉನ್ನತ ಸ್ಥಳಗಳನ್ನೂ ಅರಸನು ಹೊಲೆಮಾಡಿ
23:14b.2KI.023.014 ವಿಗ್ರಹಗಳನ್ನು ಮುರಿದು ವಿಗ್ರಹದ ತೋಪುಗಳನ್ನು ಕಡಿದುಬಿಟ್ಟು ಅವುಗಳ ಸ್ಥಳಗಳನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು.
23:15b.2KI.023.015 ಇದಲ್ಲದೆ ಬೇತೇಲಿನಲ್ಲಿದ್ದ ಬಲಿಪೀಠವನ್ನೂ ಇಸ್ರಾಯೇಲ್ಯರು ಪಾಪಮಾಡಲು ಪ್ರೇರೇಪಿಸಿದ ನೆಬಾ ಟನ ಮಗನಾದ ಯಾರೊಬ್ಬಾಮನು ಮಾಡಿದ ಉನ್ನತ ಸ್ಥಳವನ್ನೂ ಅವನು ಕೆಡವಿಹಾಕಿ ಸುಟ್ಟ್ಟು ಅದನ್ನು ಧೂಳಾ ಗಲು ಪುಡಿಮಾಡಿ ವಿಗ್ರಹದ ತೋಪನ್ನು ಸುಡಿಸಿದನು.
23:16b.2KI.023.016 ಯೋಷೀಯನು ತಿರುಗಿಕೊಂಡು ಅಲ್ಲಿ ಬೆಟ್ಟದಲ್ಲಿದ್ದ ಸಮಾಧಿಗಳನ್ನು ಕಂಡು, ಕಳುಹಿಸಿ, ಸಮಾಧಿಗಳಿಂದ ಎಲುಬುಗಳನ್ನು ತೆಗೆದುಕೊಂಡು ಈ ಮಾತುಗಳನ್ನು ಪ್ರಕಟಿಸಿದ ದೇವರ ಮನುಷ್ಯನು ಸಾರಿದ ಕರ್ತನ ವಾಕ್ಯದ ಪ್ರಕಾರ ಬಲಿಪೀಠದ ಮೇಲೆ ಅವುಗಳನ್ನು ಸುಟ್ಟುಬಿಟ್ಟು ಅದನ್ನು ಹೊಲೆಮಾಡಿದನು.
23:17b.2KI.023.017 ಆಗ ಅವನು--ನಾನು ನೋಡಿದ ಆ ಶಿರೋನಾಮವೇನು ಅಂದನು. ಅದಕ್ಕೆ ಆ ಪಟ್ಟಣದ ಜನರು ಅವನಿಗೆಯೆಹೂದದಿಂದ ಬಂದು ಬೇತೇಲಿನ ಬಲಿಪೀಠಕ್ಕೆ ವಿರೋಧವಾಗಿ ನೀನು ಮಾಡಿದ ಈ ಕಾರ್ಯಗಳನ್ನು ಸಾರಿ ಹೇಳಿದ ದೇವರ ಮನುಷ್ಯನ ಸಮಾಧಿ ಅಂದರು.
23:18b.2KI.023.018 ಆಗ ಅವನು--ಅವನನ್ನು ಬಿಟ್ಟುಬಿಡಿರಿ; ಯಾವನೂ ಅವನ ಎಲುಬುಗಳನ್ನು ಮುಟ್ಟದೆ ಇರಲಿ ಅಂದನು. ಹಾಗೆಯೇ ಅವರು ಅವನ ಎಲುಬುಗಳನ್ನು ಸಮಾರ್ಯ ದಿಂದ ಬಂದ ಪ್ರವಾದಿಯ ಎಲುಬುಗಳ ಸಂಗಡ ಸುಮ್ಮನೆ ಬಿಟ್ಟರು.
23:19b.2KI.023.019 ಕೋಪವನ್ನೆಬ್ಬಿಸುವದಕ್ಕೆ ಇಸ್ರಾ ಯೇಲಿನ ಅರಸುಗಳು ಸಮಾರ್ಯದ ಪಟ್ಟಣಗಳಲ್ಲಿ ಮಾಡಿದ, ಕರ್ತನ ಕೋಪವನ್ನೆಬ್ಬಿಸಿದ ಉನ್ನತ ಸ್ಥಳಗಳ ಮನೆಗಳನ್ನೆಲ್ಲಾ ಯೋಷೀಯನು ಕೆಡವಿಹಾಕಿ ಬೇತೇಲಿ ನಲ್ಲಿ ತಾನು ಮಾಡಿದ ಎಲ್ಲಾ ಕ್ರಿಯೆಗಳ ಪ್ರಕಾರ ಅವುಗಳಿಗೆ ಮಾಡಿ,
23:20b.2KI.023.020 ಆ ಸ್ಥಳಗಳಲ್ಲಿದ್ದ ಉನ್ನತ ಸ್ಥಳಗಳ ಯಾಜಕರನ್ನೆಲ್ಲಾ ಬಲಿಪೀಠಗಳ ಮೇಲೆ ಕೊಂದುಹಾಕಿ, ಅವುಗಳ ಮೇಲೆ ಮನುಷ್ಯರ ಎಲುಬುಗಳನ್ನು ಸುಟ್ಟು ಯೆರೂಸಲೇಮಿಗೆ ತಿರಿಗಿ ಬಂದನು.
23:21b.2KI.023.021 ಅರಸನು ಎಲ್ಲಾ ಜನರಿಗೂ--ಈ ಒಡಂಬಡಿಕೆಯ ಪುಸ್ತಕದಲ್ಲಿ ಬರೆಯಲ್ಪಟ್ಟ ಹಾಗೆಯೇ ನಿಮ್ಮ ದೇವ ರಾದ ಕರ್ತನ ಪಸ್ಕವನ್ನು ಆಚರಿಸಿರಿ ಎಂದು ಆಜ್ಞಾಪಿ ಸಿದನು.
23:22b.2KI.023.022 ನಿಶ್ಚಯವಾಗಿ ಇಸ್ರಾಯೇಲಿಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳ ದಿವಸಗಳು ಮೊದಲು ಗೊಂಡು ಇಸ್ರಾಯೇಲಿನ ಯೆಹೂದದ ಅರಸುಗಳ ಸಕಲ ದಿವಸಗಳಲ್ಲಿಯೂ ಇಂಥಾ ಪಸ್ಕವು ಆಚರಿಸ ಲ್ಪಟ್ಟಿದ್ದಿಲ್ಲ.
23:23b.2KI.023.023 ಅರಸನಾದ ಯೋಷೀಯನ ಆಳ್ವಿಕೆಯ ಹದಿನೆಂಟನೇ ವರುಷದಲ್ಲಿ ಈ ಪಸ್ಕವು ಯೆರೂಸ ಲೇಮಿನಲ್ಲಿ ಕರ್ತನಿಗೆ ಆಚರಿಸಲ್ಪಟ್ಟಿತು.
23:24b.2KI.023.024 ಇದಲ್ಲದೆ ಯಾಜಕನಾದ ಹಿಲ್ಕೀಯನು ಕರ್ತನ ಮನೆಯಲ್ಲಿ ಕಂಡುಕೊಂಡ ಪುಸ್ತಕದಲ್ಲಿ ಬರೆಯಲ್ಪಟ್ಟ ನ್ಯಾಯ ಪ್ರಮಾಣದ ಮಾತುಗಳನ್ನು ಯೋಷೀಯನು ಈಡೇ ರಿಸುವ ಹಾಗೆ ಯೆಹೂದ ದೇಶದಲ್ಲಿಯೂ ಯೆರೂ ಸಲೇಮಿನಲ್ಲಿಯೂ ಕಂಡು ಹಿಡಿಯಲ್ಪಟ್ಟ ಯಕ್ಷಿಣಿ ಗಾರರನ್ನೂ ಮಂತ್ರಗಾರರನ್ನೂ ವಿಗ್ರಹಗಳನ್ನೂ ಮಣ್ಣು ದೇವರುಗಳನ್ನೂ ಎಲ್ಲಾ ಅಸಹ್ಯಕರವಾದವುಗಳನ್ನೂ ತೆಗೆದುಹಾಕಿ ಬಿಟ್ಟನು.
23:25b.2KI.023.025 ತನ್ನ ಪೂರ್ಣಹೃದಯ ದಿಂದಲೂ ತನ್ನ ಪೂರ್ಣಪ್ರಾಣದಿಂದಲೂ ಪೂರ್ಣ ಬಲದಿಂದಲೂ ಮೋಶೆಯ ಎಲ್ಲಾ ನ್ಯಾಯಪ್ರಮಾ ಣದ ಪ್ರಕಾರ ಕರ್ತನ ಬಳಿಗೆ ತಿರುಗಿದ ಅರಸನ ಹಾಗೆ ಅವನ ಮುಂದೆ ಯಾವನೂ ಇರಲಿಲ್ಲ; ಅವನ ತರುವಾಯ ಅವನ ಹಾಗೆ ಯಾವನೂ ಎದ್ದಿರಲಿಲ್ಲ.
23:26b.2KI.023.026 ಆದರೆ ಮನಸ್ಸೆಯು ಕರ್ತನಿಗೆ ಕೋಪ ವನ್ನು ಎಬ್ಬಿಸಲು ಮಾಡಿದ ಎಲ್ಲಾ ಕ್ರಿಯೆಗಳಿಗೋಸ್ಕರ ಯೆಹೂದಕ್ಕೆ ವಿರೋಧವಾಗಿ ತನ್ನನ್ನು ಉದ್ರೇಕಿಸಿದ ಕೋಪವನ್ನೂ ತನ್ನ ಮಹಾಕೋಪದ ಉರಿಯನ್ನೂ ಕರ್ತನು ಬಿಟ್ಟುಬಿಡಲಿಲ್ಲ.
23:27b.2KI.023.027 ಕರ್ತನು--ನಾನು ಇಸ್ರಾ ಯೇಲನ್ನು ತೆಗೆದು ಹಾಕಿದ ಹಾಗೆ ಯೆಹೂದವನ್ನು ಸಹ ನನ್ನ ಸಮ್ಮುಖದಿಂದ ತೆಗೆದುಹಾಕುವೆನು; ಇದ ಲ್ಲದೆ ನಾನು ಆದುಕೊಂಡ ಈ ಪಟ್ಟಣವಾದ ಯೆರೂ ಸಲೇಮನ್ನೂ ನನ್ನ ಹೆಸರು ಅಲ್ಲಿರುವದೆಂದು ನಾನು ಹೇಳಿದ ಮನೆಯನ್ನೂ ತೆಗೆದುಬಿಡುವೆನು ಅಂದನು.
23:28b.2KI.023.028 ಯೋಷೀಯನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಯೆಹೂದದ ಅರಸುಗಳ ವೃತಾಂತ ಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
23:29b.2KI.023.029 ಅವನ ದಿವಸಗಳಲ್ಲಿ ಐಗುಪ್ತದ ಅರಸನಾದ ಫರೋಹನೆಕೋ ಎಂಬವನು ಅಶ್ಶೂರಿನ ಅರಸನ ಮೇಲೆ ಯೂಫ್ರೇ ಟೀಸ್ ನದಿಗೆ ಹೋದನು; ಅರಸನಾದ ಯೋಷೀ ಯನು ಅವನ ಮೇಲೆ ಹೋದನು; ಅವನು ಇವನನ್ನು ನೋಡಿದಾಗ ಮೆಗಿದ್ದೋವಿನ ಬಳಿಯಲ್ಲಿ ಕೊಂದು ಹಾಕಿದನು.
23:30b.2KI.023.030 ಅವನ ಸೇವಕರು ಸತ್ತವನಾದ ಅವನನ್ನು ರಥದಲ್ಲಿ ಮೆಗಿದ್ದೋವಿನಿಂದ ಯೆರೂಸಲೇಮಿಗೆ ತಕ್ಕೊಂಡು ಬಂದು ಅವನ ಸ್ವಂತ ಸಮಾಧಿಯಲ್ಲಿ ಹೂಣಿಟ್ಟರು. ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು ಅಭಿಷೇಕಿಸಿ ಅವನ ತಂದೆಗೆ ಬದಲಾಗಿ ಅರಸನನ್ನಾಗಿ ಮಾಡಿದರು.
23:31b.2KI.023.031 ಯೆಹೋವಾಹಾಜನು ಆಳಲು ಆರಂಭಿಸಿದಾಗ ಇಪ್ಪತ್ತು ಮೂರು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಮೂರು ತಿಂಗಳು ಆಳಿದನು. ಅವನ ತಾಯಿ ಲಿಬ್ನ ಪಟ್ಟಣದ ಯೆರೆವಿಾಯನ ಮಗಳಾಗಿದ್ದು ಹಮೂಟಲ್ ಎಂಬವಳಾಗಿದ್ದಳು.
23:32b.2KI.023.032 ಅವನು ತನ್ನ ತಂದೆಗಳು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.
23:33b.2KI.023.033 ಆದರೆ ಅವನು ಯೆರೂಸಲೇಮಿನಲ್ಲಿ ಆಳದ ಹಾಗೆ ಫರೋಹನೆಕೋ ಎಂಬವನು ಹಮಾತ್ ದೇಶದ ರಿಬ್ಲಾದಲ್ಲಿ ಅವನನ್ನು ಬಂಧಿಸಿ ದೇಶದ ಮೇಲೆ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರವನ್ನೂ ದಂಡ ತೆರಬೇಕಾ ಯಿತು.
23:34b.2KI.023.034 ಫರೋಹನೆಕೋ ಯೋಷೀಯನ ಮಗ ನಾದ ಎಲ್ಯಾಕೀಮನನ್ನು ಅವನ ತಂದೆಯಾದ ಯೋಷೀ ಯನಿಗೆ ಬದಲಾಗಿ ಅರಸನನ್ನಾಗಿ ಮಾಡಿ ಅವನಿಗೆ ಯೆಹೋಯಾಕೀಮನೆಂಬ ಬದಲು ಹೆಸರನ್ನಿಟ್ಟು ಯೆಹೋವಾಹಾಜನನ್ನು ತೆಗೆದುಕೊಂಡು ಹೋದನು; ಅವನು ಐಗುಪ್ತದಲ್ಲಿ ಸತ್ತನು.
23:35b.2KI.023.035 ಯೆಹೋಯಾಕೀ ಮನು ಬೆಳ್ಳಿಯನ್ನೂ ಬಂಗಾರವನ್ನೂ ಫರೋಹನಿಗೆ ಕೊಟ್ಟನು. ಫರೋಹನೆಕೋವಿನ ಆಜ್ಞೆಯ ಪ್ರಕಾರ ಅವನು ಹಣವನ್ನು ಕೊಡುವಂತೆ ದೇಶಕ್ಕೆ ಕಪ್ಪವನ್ನು ನಿಷ್ಕರ್ಷೆ ಮಾಡಿದನು. ಅವನು ಬೆಳ್ಳಿಯನ್ನೂ ಬಂಗಾರ ವನ್ನೂ ನೇಕೊವೆಂಬ ಫರೋಹನಿಗೆ ಕೊಡುವ ಹಾಗೆ ದೇಶದ ಜನರಿಂದ ಪ್ರತಿ ಮನುಷ್ಯನ ತೆರಿಗೆಯ ಪ್ರಕಾರ ಬಲವಂತವಾಗಿ ತಕ್ಕೊಂಡನು.
23:36b.2KI.023.036 ಯೆಹೋಯಾಕೀಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಅವನ ತಾಯಿ ರೂಮದ ಪೆದಾಯನ ಮಗಳು ಜೆಬೂದಾಳೆಂಬವಳು.ಅವನು ತನ್ನ ತಂದೆಗಳು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.
23:37b.2KI.023.037 ಅವನು ತನ್ನ ತಂದೆಗಳು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.
24
24:1b.2KI.024.001 ಅವನ ದಿವಸಗಳಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚರನು ಬಂದನು. ಯೆಹೋಯಾಕೀಮನು ಮೂರು ವರುಷ ಅವನ ಸೇವಕನಾಗಿದ್ದು ತರುವಾಯ ಅವನ ಮೇಲೆ ತಿರುಗಿ ಬಿದ್ದನು.
24:2b.2KI.024.002 ಆದರೆ ಕರ್ತನು ಕಸ್ದೀಯರ, ಅರಾಮ್ಯರ, ಮೋವಾಬ್ಯರ, ಅಮ್ಮೋನ್ಯರ ಗುಂಪುಗಳನ್ನೂ ಅವನ ಮೇಲೆ ಕಳುಹಿಸಿದನು. ಕರ್ತನು ಪ್ರವಾದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ ಮಾತಿನ ಪ್ರಕಾರ ಯೆಹೂದವನ್ನು ನಾಶ ಮಾಡುವಂತೆ ಅದರ ಮೇಲೆ ಅವರನ್ನು ಬರಮಾಡಿದನು.
24:3b.2KI.024.003 ನಿಶ್ಚಯವಾಗಿ ಕರ್ತನ ಅಪ್ಪಣೆಯಿಂದ ಇದು ಯೆಹೂದದ ಮೇಲೆ ಆಯಿತು. ಅದೇನಂದರೆ, ಮನಸ್ಸೆಯು ತನ್ನ ಎಲ್ಲಾ ಕೃತ್ಯಗಳಿಂದ ಮಾಡಿದ ಪಾಪಗಳ ನಿಮಿತ್ತ ಅವರನ್ನು ಆತನು ತನ್ನ ಸಮ್ಮುಖದಿಂದ ತೆಗೆದು ಹಾಕುವದಕ್ಕೋಸ್ಕರವೇ.
24:4b.2KI.024.004 ಇದಲ್ಲದೆ ಅವನು ಚೆಲ್ಲಿದ ನಿರಪರಾಧದ ರಕ್ತದ ನಿಮಿತ್ತ ಇದು ಉಂಟಾಯಿತು. ಅವನು ನಿರಪರಾಧದ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ್ದನು. ಕರ್ತನು ಅದನ್ನು ಮನ್ನಿಸಲೊಲ್ಲದೆ ಇದ್ದನು.
24:5b.2KI.024.005 ಯೆಹೋಯಾ ಕೀಮನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಯೆಹೂದದ ಅರಸುಗಳ ವೃತ್ತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
24:6b.2KI.024.006 ಯೆಹೋಯಾಕೀಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನ ಮಗನಾದ ಯೆಹೋಯಾಖೀನನು ಅವನಿಗೆ ಬದಲಾಗಿ ಅರಸ ನಾದನು.
24:7b.2KI.024.007 ಆದರೆ ಐಗುಪ್ತದ ಅರಸನು ತನ್ನ ದೇಶದಿಂದ ತಿರಿಗಿ ಬರಲಿಲ್ಲ. ಯಾಕಂದರೆ ಐಗುಪ್ತದ ನದಿ ಮೊದಲು ಗೊಂಡು ಯೂಫ್ರೇಟೀಸ್ ನದಿಯ ವರೆಗೂ ಐಗು ಪ್ತದ ಅರಸನಿಗೆ ಇದ್ದದ್ದೆಲ್ಲಾ ಬಾಬೆಲಿನ ಅರಸನು ಹಿಡಿದಿದ್ದನು.
24:8b.2KI.024.008 ಯೆಹೋಯಾಖೀನನು ಆಳಲು ಆರಂಭಿಸಿದಾಗ ಹದಿನೆಂಟು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು. ಅವನ ತಾಯಿಯು ಯೆರೂಸಲೇಮಿನ ಎಲ್ನಾತಾನನ ಮಗಳಾಗಿದ್ದು ನೆಹು ಷ್ಟಾಳೆಂಬವಳು.
24:9b.2KI.024.009 ಅವನು ತನ್ನ ತಂದೆಯು ಮಾಡಿದ ಪ್ರಕಾರವೆಲ್ಲಾ ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದನು.
24:10b.2KI.024.010 ಆ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕ ದ್ನೆಚರನ ಸೇವಕರು ಯೆರೂಸಲೇಮಿಗೆ ವಿರೋಧವಾಗಿ ಬಂದಾಗ ಆ ಪಟ್ಟಣವು ಮುತ್ತಿಗೆ ಹಾಕಲ್ಪಟ್ಟಿತು.
24:11b.2KI.024.011 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಪಟ್ಟಣಕ್ಕೆ ವಿರೋಧವಾಗಿ ಬಂದನು; ಅವನ ಸೇವಕರು ಅದನ್ನು ಮುತ್ತಿಗೆ ಹಾಕಿದರು.
24:12b.2KI.024.012 ಆಗ ಯೆಹೂದದ ಅರಸನಾದ ಯೆಹೋಯಾಖೀನನೂ ಅವನ ತಾಯಿಯೂ ಸೇವ ಕರೂ ಪ್ರಧಾನರೂ ಕಂಚುಕಿಯರೂ ಅಧಿಕಾರಿಗಳ ಸಹಿತವಾಗಿ ಬಾಬೆಲಿನ ಅರಸನ ಬಳಿಗೆ ಹೋದರು. ಬಾಬೆಲಿನ ಅರಸನು ತನ್ನ ಆಳಿಕೆಯ ಎಂಟನೇ ವರುಷ ದಲ್ಲಿ ಅವನನ್ನು ಸೆರೆಹಿಡಿದನು.
24:13b.2KI.024.013 ಕರ್ತನು ಹೇಳಿದ ಪ್ರಕಾರವೇ ಅವನು ಅಲ್ಲಿಂದ ಕರ್ತನ ಮನೆಯ ಎಲ್ಲಾ ಬೊಕ್ಕಸಗಳನ್ನೂ ಅರಮನೆಯ ಬೊಕ್ಕಸಗಳನ್ನೂ ಇಸ್ರಾಯೇಲಿನ ಅರಸನಾದ ಸೊಲೊಮೋನನು ಕರ್ತನ ಮನೆಯಲ್ಲಿ ಮಾಡಿದ ಬಂಗಾರದ ಎಲ್ಲಾ ಪಾತ್ರೆಗಳನ್ನೂ ತುಂಡು ತುಂಡಾಗಿ ಕತ್ತರಿಸಿಬಿಟ್ಟನು.
24:14b.2KI.024.014 ಅವನು ಯೆರೂಸಲೇಮಿನವರೆಲ್ಲರನ್ನೂ ಎಲ್ಲಾ ಪ್ರಧಾನರನ್ನೂ ಎಲ್ಲಾ ಸ್ಥಿತಿಯುಳ್ಳ ಪರಾಕ್ರಮಶಾಲಿ ಗಳನ್ನೂ ಹತ್ತು ಸಾವಿರ ಸೆರೆಯವರನ್ನೂ ಮತ್ತು ಎಲ್ಲಾ ಕೌಶಲ್ಯಗಾರರನ್ನೂ ಕಮ್ಮಾರರನ್ನೂ ಅಲ್ಲಿಂದ ಒಯ್ದನು; ದೇಶದ ಬಡವರ ಹೊರತು ಉಳಿದವರು ಯಾರೂ ಅಲ್ಲಿ ಇರಲಿಲ್ಲ.
24:15b.2KI.024.015 ಯೆಹೋಯಾಖೀನನನ್ನು ಬಾಬೆ ಲಿಗೆ ಒಯ್ದನು; ಅವನು ಅರಸನ ತಾಯಿಯನ್ನೂ ಅರಸನ ಹೆಂಡತಿಯರನ್ನೂ ಅವನ ಅಧಿಕಾರಿಗಳನ್ನೂ ದೇಶದ ಬಲಶಾಲಿಗಳನ್ನೂ ಯೆರೂಸಲೇಮಿನಿಂದ ಬಾಬೆಲಿಗೆ ಸೆರೆಯಾಗಿ ಒಯ್ದನು.
24:16b.2KI.024.016 ಬಾಬೆಲಿನ ಅರಸನು ಎಲ್ಲಾ ಸ್ಥಿತಿವಂತರಾದ ಏಳುಸಾವಿರ ಜನರನ್ನೂ ಕೌಶಲ್ಯಗಾರರೂ ಮತ್ತು ಕಮ್ಮಾರರೂ ಆದ ಸಾವಿರ ಜನರನ್ನೂ ಬಲವುಳ್ಳ ಯುದ್ಧ ಮಾಡತಕ್ಕವರೆಲ್ಲರನ್ನೂ ಬಾಬೆಲಿಗೆ ಸೆರೆಯಾಗಿ ಒಯ್ದನು.
24:17b.2KI.024.017 ಬಾಬೆಲಿನ ಅರ ಸನು ಯೆಹೋಯಾಖೀನನ ಚಿಕ್ಕಪ್ಪನಾದ ಮತ್ತನ್ಯ ನನ್ನು ಅವನಿಗೆ ಬದಲಾಗಿ ಅರಸನನ್ನಾಗಿ ಮಾಡಿ ಅವನಿಗೆ ಚಿದ್ಕೀಯ ಎಂಬ ಹೆಸರನ್ನಿಟ್ಟನು.
24:18b.2KI.024.018 ಚಿದ್ಕೀಯನು ಆಳಲು ಆರಂಭಿಸಿದಾಗ ಇಪ್ಪ ತ್ತೊಂದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಅವನ ತಾಯಿ ಲಿಬ್ನದ ಯೆರೆವಿಾಯನ ಮಗಳಾಗಿದ್ದ ಹಮೂಟಲ್ ಎಂಬ ವಳು.
24:19b.2KI.024.019 ಅವನು ಯೆಹೋಯಾಕೀಮನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿ ದನು.ಕರ್ತನು ಅವರನ್ನು ತನ್ನ ಸಮ್ಮುಖದಿಂದ ದೊಬ್ಬಿ ಹಾಕುವ ವರೆಗೆ ಯೆರೂಸಲೇಮಿನ ಮತ್ತು ಯೆಹೂದದ ಮೇಲೆ ಉಂಟಾದ ಆತನ ಕೋಪದ ನಿಮಿತ್ತ ಚಿದ್ಕೀಯನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದನು.
24:20b.2KI.024.020 ಕರ್ತನು ಅವರನ್ನು ತನ್ನ ಸಮ್ಮುಖದಿಂದ ದೊಬ್ಬಿ ಹಾಕುವ ವರೆಗೆ ಯೆರೂಸಲೇಮಿನ ಮತ್ತು ಯೆಹೂದದ ಮೇಲೆ ಉಂಟಾದ ಆತನ ಕೋಪದ ನಿಮಿತ್ತ ಚಿದ್ಕೀಯನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದನು.
25
25:1b.2KI.025.001 ಅವನ ಆಳಿಕೆಯ ಒಂಭತ್ತನೇ ವರುಷದ ಹತ್ತನೇ ತಿಂಗಳಿನ ಹತ್ತನೇ ದಿವಸದಲ್ಲಿ ಏನಾಯಿತಂದರೆ, ಬಾಬೆಲಿನ ಅರಸನಾದ ನೆಬೂಕ ದ್ನೆಚರನು ತಾನೂ ತನ್ನ ಎಲ್ಲಾ ಸೈನ್ಯವೂ ಯೆರೂಸ ಲೇಮಿನ ಮೇಲೆ ಬಂದು ಅದಕ್ಕೆ ಎದುರಾಗಿ ದಂಡಿಳಿದು ಅದರ ಸುತ್ತಲೂ ದಿಣ್ಣೆಗಳನ್ನು ಹಾಕಿದರು.
25:2b.2KI.025.002 ಅರಸನಾದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೇ ವರುಷದ ವರೆಗೆ ಪಟ್ಟಣವು ಮುತ್ತಿಗೆ ಹಾಕಲ್ಪಟ್ಟಿತು.
25:3b.2KI.025.003 ನಾಲ್ಕನೇ ತಿಂಗಳಿನ ಒಂಭತ್ತನೇ ದಿವಸದಲ್ಲಿ ಪಟ್ಟಣದಲ್ಲಿ ಬರವು ಬಲವಾದದರಿಂದ ದೇಶದ ಜನರಿಗೆ ರೊಟ್ಟಿಯಿಲ್ಲದೆ ಹೋಯಿತು.
25:4b.2KI.025.004 ಪಟ್ಟಣವು ವಿಭಾಗಿಸಲ್ಪಟ್ಟಿದ್ದರಿಂದ ಸೈನ್ಯದ ಜನರೆಲ್ಲರೂ ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಬಾಗಲ ಮಾರ್ಗವಾಗಿ ಓಡಿಹೋದರು; ಆದರೆ ಅರಸನು ಬಯಲು ಮಾರ್ಗ ವಾಗಿ ಹೋದನು.
25:5b.2KI.025.005 ಕಸ್ದೀಯರು ಪಟ್ಟಣದ ಬಳಿಯಲ್ಲಿ ಇದ್ದದರಿಂದ ಅವರ ದಂಡು ಅರಸನನ್ನು ಹಿಂಬಾಲಿಸಿ ಯೆರಿಕೋವಿನ ಬಯಲು ಸ್ಥಳಗಳಲ್ಲಿ ಅವನನ್ನು ಹಿಡು ಕೊಂಡರು.
25:6b.2KI.025.006 ಅವನ ದಂಡೆಲ್ಲಾ ಅವನ ಕಡೆಯಿಂದ ಚದರಿ ಹೋಯಿತು. ಅವರು ಅರಸನನ್ನು ಹಿಡಿದು ಕೊಂಡು, ರಿಬ್ಲದಲ್ಲಿರುವ ಬಾಬೆಲಿನ ಅರಸನ ಬಳಿಗೆ ತಕ್ಕೊಂಡು ಬಂದು ಅವನ ಮೇಲೆ ನ್ಯಾಯವನ್ನು ನಿರ್ಣಯಿಸಿದರು.
25:7b.2KI.025.007 ಅವರು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣೆದುರಿನಲ್ಲಿಯೇ ಕೊಂದ ತರುವಾಯ ಅವನ ಕಣ್ಣುಗಳನ್ನು ಕಿತ್ತುಹಾಕಿ ಅವನಿಗೆ ಹಿತ್ತಾಳೆಯ ಬೇಡಿ ಹಾಕಿ ಅವನನ್ನು ಬಾಬೆಲಿಗೆ ತಕ್ಕೊಂಡು ಹೋದರು.
25:8b.2KI.025.008 ಐದನೇ ತಿಂಗಳಿನ ಏಳನೇ ದಿವಸಕ್ಕೆ ಸರಿಯಾಗಿ ಬಾಬೆಲಿನ ಅರಸನಾದ ನೆಬೂಕದ್ನೆಚರನ ಆಳ್ವಿಕೆಯ ಹತ್ತೊಂಭತ್ತನೇ ವರುಷದಲ್ಲಿ ಬಾಬೆಲಿನ ಅರಸನ ಸೇವಕ ನಾದ ಕಾವಲಿನ ಅಧಿಪತಿಯಾದ ನೆಬೂಜರದಾನನು ಯೆರೂಸಲೇಮಿಗೆ ಬಂದು,
25:9b.2KI.025.009 ಕರ್ತನ ಮನೆಯನ್ನೂ ಅರಮನೆಯನ್ನೂ ಯೆರೂಸಲೇಮಿನಲ್ಲಿರುವ ಎಲ್ಲಾ ಮನೆಗಳನ್ನೂ ಪ್ರತಿ ದೊಡ್ಡ ಮನುಷ್ಯನ ಮನೆಯನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು.
25:10b.2KI.025.010 ಕಾವಲುಗಾರರ ಅಧಿಪತಿಯ ಸಂಗಡದಲ್ಲಿದ್ದ ಕಸ್ದೀಯರ ಸೈನ್ಯದವರೆ ಲ್ಲರೂ ಯೆರೂಸಲೇಮಿನ ಸುತ್ತಲೂ ಇರುವ ಗೋಡೆ ಗಳನ್ನು ಕೆಡವಿಬಿಟ್ಟರು.
25:11b.2KI.025.011 ಪಟ್ಟಣದಲ್ಲಿ ಉಳಿದ ಜನ ರನ್ನೂ ಬಾಬೆಲಿನ ಅರಸನ ಕಡೆಗೆ ಬಿದ್ದವರನ್ನೂ ಗುಂಪಿ ನಲ್ಲಿ ಮಿಕ್ಕ ಜನರನ್ನೂ ಕಾವಲಿನ ಅಧಿಪತಿಯಾದ ನೆಬೂಜರದಾನನು ಸೆರೆಯಾಗಿ ಒಯ್ದನು.
25:12b.2KI.025.012 ಆದರೆ ಕಾವಲಿನ ಅಧಿಪತಿಯು ದ್ರಾಕ್ಷೇತೋಟ ಮಾಡುವ ಹಾಗೆಯೂ ಬೇಸಾಯ ಮಾಡುವ ಹಾಗೆಯೂ ದೇಶದ ಬಡವರನ್ನು ಉಳಿಸಿಬಿಟ್ಟನು.
25:13b.2KI.025.013 ಇದಲ್ಲದೆ ಕರ್ತನ ಮನೆಯಲ್ಲಿದ್ದ ಹಿತ್ತಾಳೆ ಸ್ತಂಭಗಳನ್ನೂ ಆಧಾರಗಳನ್ನೂ ಕರ್ತನ ಮನೆಯಲ್ಲಿದ್ದ ಹಿತ್ತಾಳೆ ಸಮುದ್ರವೆಂಬ ಪಾತ್ರೆ ಯನ್ನೂ ಕಸ್ದೀಯರು ಒಡೆದು ಹಾಕಿ ಅದರ ಹಿತ್ತಾಳೆ ಯನ್ನು ಬಾಬೆಲಿಗೆ ಒಯ್ದರು.
25:14b.2KI.025.014 ಮಡಕೆಗಳನ್ನೂ ಸಲಿಕೆ ಗಳನ್ನೂ ಕತ್ತರಿಗಳನ್ನೂ ಸೌಟುಗಳನ್ನೂ ಅವರು ಸೇವಿಸುತ್ತಿದ್ದ ಎಲ್ಲಾ ಹಿತ್ತಾಳೆಯ ಸಾಮಾನುಗಳನ್ನೂ ತಕ್ಕೊಂಡು ಹೋದರು.
25:15b.2KI.025.015 ಕಾವಲುಗಾರರ ಅಧಿಪತಿಯು ಅಗ್ನಿಪಾತ್ರೆಗಳನ್ನೂ ತಟ್ಟೆಗಳನ್ನೂ ಬಂಗಾರ ದವುಗಳಾದ ಬಂಗಾರವನ್ನೂ ಬೆಳ್ಳಿಯವುಗಳಾದ ಬೆಳ್ಳಿ ಯನ್ನೂ ತಕ್ಕೊಂಡನು.
25:16b.2KI.025.016 ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ್ದ ಎರಡು ಸ್ತಂಭಗಳೂ ಸಮುದ್ರವೆನಿಸಿಕೊಂಡ ಪಾತ್ರೆಯೂ ಆಧಾರಗಳೂ ಈ ಎಲ್ಲಾ ಸಾಮಾನುಗಳ ತಾಮ್ರವು ತೂಕ ಮಾಡ ಲಾರದಷ್ಟಿತ್ತು.
25:17b.2KI.025.017 ಒಂದು ಸ್ತಂಭವು ಹದಿನೆಂಟು ಮೊಳ ಎತ್ತರವಾಗಿತ್ತು. ಅದರ ಮೇಲಿದ್ದ ಬೋದಿಗೆ ತಾಮ್ರ ದ್ದಾಗಿ ಮೂರು ಮೊಳ ಉದ್ದವಾಗಿತ್ತು. ಬೋದಿಗೆಯ ಸುತ್ತಲಿದ್ದ ಹೆಣೆತದ ಕೆಲಸವೂ ದಾಳಿಂಬರಗಳೂ ಎಲ್ಲಾ ತಾಮ್ರವಾಗಿತ್ತು. ಎರಡನೇ ಸ್ತಂಭಕ್ಕೆ ಇದರ ಹಾಗೆಯೇ ಹೆಣೆತದ ಕೆಲಸ ಉಂಟಾಗಿತ್ತು.
25:18b.2KI.025.018 ಕಾವಲುಗಾರರ ಅಧಿಪತಿಯು ಪ್ರಧಾನ ಯಾಜಕನಾದ ಸೆರಾಯನನ್ನೂ ಎರಡನೇ ಯಾಜಕನಾದ ಚೆಫನ್ಯನನ್ನೂ ಮೂರು ಮಂದಿ ದ್ವಾರಪಾಲಕರನ್ನೂ ಹಿಡಿದನು.
25:19b.2KI.025.019 ಇದಲ್ಲದೆ ಪಟ್ಟಣದೊಳಗಿಂದ ಯುದ್ಧಸ್ಥರ ಮೇಲಿದ್ದ ಒಬ್ಬ ಅಧಿ ಕಾರಿಯನ್ನೂ ಪಟ್ಟಣದಲ್ಲಿ ಸಿಕ್ಕಿದ ಅರಸನ ಸಮ್ಮುಖ ದಲ್ಲಿದ್ದ ಐದು ಮಂದಿಯನ್ನೂ ದೇಶದ ಜನರನ್ನೂ ಸೈನ್ಯದ ತರಬೇತು ಮಾಡಿದ ಪ್ರಧಾನನ ಲೇಖಕನೂ ಪಟ್ಟಣದಲ್ಲಿ ಸಿಕ್ಕಿದ ದೇಶದ ಜನರಾದ ಅರವತ್ತು ಮಂದಿಯನ್ನೂ ಅವನು ಹಿಡಿದನು.
25:20b.2KI.025.020 ಕಾವಲಿನ ವರ ಅಧಿಪತಿಯಾದ ನೆಬೂಜರದಾನನು ಇವರನ್ನು ತಕ್ಕೊಂಡು ರಿಬ್ಲದಲ್ಲಿದ್ದ ಬಾಬೆಲಿನ ಅರಸನ ಬಳಿಗೆ ಬಂದನು.
25:21b.2KI.025.021 ಬಾಬೆಲಿನ ಅರಸನು ಹಮಾತ್ ರಿಬ್ಲ ದಲ್ಲಿ ಅವರನ್ನು ಹೊಡೆದು ಕೊಂದುಹಾಕಿದನು. ಈ ಪ್ರಕಾರವೇ ಯೆಹೂದ್ಯರು ತಮ್ಮ ದೇಶದಲ್ಲಿಂದ ಸೆರೆ ಯಾಗಿ ಒಯ್ಯಲ್ಪಟ್ಟರು.
25:22b.2KI.025.022 ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ಯೆಹೂದ ದೇಶದಲ್ಲಿ ಉಳಿಸಿದ ಜನರ ಮೇಲೆ ಶಾಫಾನನ ಮೊಮ್ಮಗನೂ ಅಹೀಕಾಮನ ಮಗನೂ ಆದ ಗೆದಲ್ಯನನ್ನು ಅಧಿಪತಿಯಾಗಿ ಮಾಡಿದನು.
25:23b.2KI.025.023 ಆದರೆ ಬಾಬೆಲಿನ ಅರಸನು ಗೆದಲ್ಯನನ್ನು ಅಧಿಪತಿ ಯಾಗಿ ಮಾಡಿದ್ದಾನೆಂದು ದಂಡುಗಳ ಅಧಿಪತಿಗಳೂ ಅವರ ಜನರೂ ಕೇಳಿದ ಮೇಲೆ ನೆತನ್ಯನ ಮಗನಾದ ಇಷ್ಮಾಯೇಲನೂ ಕಾರೇಹನ ಮಗನಾದ ಯೋಹಾ ನನೂ ನೆಟೋಫದವನಾದ ತನ್ಹುಮೆತನ ಮಗನಾದ ಸೆರಾಯನೂ ಮಾಕಾತ್ಯರಲ್ಲಿ ಒಬ್ಬನ ಮಗನಾದ ಯಾಜನ್ಯನೂ ಅವರ ಜನರೂ ಮಿಚ್ಪದಲ್ಲಿದ್ದ ಗೆದಲ್ಯನ ಬಳಿಗೆ ಬಂದರು.
25:24b.2KI.025.024 ಆಗ ಗೆದಲ್ಯನು ಅವರಿಗೂ ಅವರ ಜನರಿಗೂ ಆಣೆಯನ್ನಿಟ್ಟು--ನೀವು ಕಸ್ದೀಯರನ್ನು ಸೇವಿಸಲು ಭಯಪಡಬೇಡಿರಿ; ದೇಶದಲ್ಲಿ ವಾಸವಾ ಗಿದ್ದು ಬಾಬೆಲಿನ ಅರಸನನ್ನು ಸೇವಿಸಿರಿ; ಆಗ ನಿಮಗೆ ಒಳ್ಳೇದಾಗಿರುವದು ಅಂದನು.
25:25b.2KI.025.025 ಆದರೆ ಏಳನೇ ತಿಂಗಳಲ್ಲಿ ರಾಜ ಸಂತಾನದವನಾದ ಎಲೀಷಾಮನ ಮೊಮ್ಮಗನೂ ನೆತನ್ಯನ ಮಗನೂ ಆದ ಇಷ್ಮಾಯೇ ಲನು ಅವನ ಸಂಗಡ ಹತ್ತು ಮಂದಿ ಬಂದು ಗೆದಲ್ಯ ನನ್ನೂ ಅವನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರನ್ನೂ ಕಸ್ದೀಯರನ್ನೂ ಹೊಡೆದು ಕೊಂದುಹಾಕಿದರು.
25:26b.2KI.025.026 ಆಗ ಹಿರಿ ಕಿರಿಯರಾದ ಎಲ್ಲಾ ಜನರೂ ದಂಡುಗಳ ಅಧಿ ಪತಿಗಳೂ ಎದ್ದು ಐಗುಪ್ತಕ್ಕೆ ಹೋದರು; ಯಾಕಂದರೆ ಕಸ್ದೀಯರಿಗೆ ಭಯಪಟ್ಟರು.
25:27b.2KI.025.027 ಆದರೆ ಯೆಹೂದದ ಅರಸನಾದ ಯೆಹೋ ಯಾಖೀನನ ಸೆರೆಯ ಮೂವತ್ತೇಳನೇ ವರುಷದ ಹನ್ನೆರಡನೇ ತಿಂಗಳಿನ ಇಪ್ಪತ್ತೇಳನೇ ದಿವಸದಲ್ಲಿ ಏನಾಯಿತಂದರೆ, ಬಾಬೆಲಿನ ಅರಸನಾದ ಎವಿಲ್ಮೆ ರೋದಕನು ಆಳಲು ಆರಂಭಿಸಿದ ವರುಷದಲ್ಲಿ ಅವನು ಯೆಹೂದದ ಅರಸನಾದ ಯೆಹೋಯಾ ಖೀನನನ್ನು ಸೆರೆಮನೆಯಿಂದ ಬಿಡಿಸಿ
25:28b.2KI.025.028 ಅವನ ಸಂಗಡ ಒಳ್ಳೇ ಮಾತುಗಳನ್ನು ಆಡಿ, ಅವನ ಸಿಂಹಾಸನವನ್ನು ಬಾಬೆಲಿನಲ್ಲಿ ತನ್ನ ಸಂಗಡ ಇರುವ ಅರಸುಗಳ ಸಿಂಹಾಸನಕ್ಕಿಂತ ದೊಡ್ಡದಾಗಿ ಮಾಡಿ ಅವನ ಸೆರೆ ವಸ್ತ್ರಗಳನ್ನು ಬದಲಾಯಿಸಿದನು.
25:29b.2KI.025.029 ಅವನು ಜೀವದಿಂದಿರುವ ವರೆಗೂ ಅರಸನ ಸಮ್ಮುಖದಲ್ಲಿ ರೊಟ್ಟಿಯನ್ನು ಯಾವಾಗಲೂ ತಿನ್ನುತ್ತಾ ಇದ್ದನು.ಇದಲ್ಲದೆ ಅವನು ಬದುಕಿರುವ ವರೆಗೂ ಪ್ರತಿ ದಿನಕ್ಕೆ ನೇಮಕವಾದ ಭೋಜನವು ಅರಸನಿಂದ ಯಾವಾಗಲೂ ಕೊಡಲ್ಪಡುತ್ತಾ ಇತ್ತು.
25:30b.2KI.025.030 ಇದಲ್ಲದೆ ಅವನು ಬದುಕಿರುವ ವರೆಗೂ ಪ್ರತಿ ದಿನಕ್ಕೆ ನೇಮಕವಾದ ಭೋಜನವು ಅರಸನಿಂದ ಯಾವಾಗಲೂ ಕೊಡಲ್ಪಡುತ್ತಾ ಇತ್ತು.
- Holder of rights
- Multilingual Bible Corpus
- Citation Suggestion for this Object
- TextGrid Repository (2025). Kannada Collection. 2 Kings (Kannada). 2 Kings (Kannada). Multilingual Parallel Bible Corpus. Multilingual Bible Corpus. https://hdl.handle.net/21.11113/0000-0016-A192-C