2 Chronicles (Kannada)
1
1:1b.2CH.001.001 ದಾವೀದನ ಮಗನಾದ ಸೊಲೊಮೋ ನನು ತನ್ನ ರಾಜ್ಯದಲ್ಲಿ ಬಲಗೊಂಡನು. ಅವನ ದೇವರಾದ ಕರ್ತನು ಅವನ ಸಂಗಡ ಇದ್ದು ಅವನನ್ನು ಅಧಿಕವಾಗಿ ಹೆಚ್ಚಿಸಿದನು.
1:2b.2CH.001.002 ಸೊಲೊಮೋ ನನು ಸಮಸ್ತ ಇಸ್ರಾಯೇಲ್ಯರೊಡನೆಯೂ ಸಹಸ್ರ ಶತಾಧಿಪತಿಗಳೊಡನೆಯೂ ನ್ಯಾಯಾಧಿಪತಿಗಳೊ ಡನೆಯೂ ಪ್ರಧಾನ ಪಿತೃಗಳೊಡನೆಯೂ ಇಸ್ರಾಯೇಲಿನಲ್ಲಿರುವ ಸಮಸ್ತ ಪ್ರಭುಗಳೊಡನೆಯೂ ಮಾತ ನಾಡಿದನು.
1:3b.2CH.001.003 ಹೀಗೆ ಅವನು ಅವನ ಸಂಗಡ ಸಮಸ್ತ ಸಭೆಯವರು ಗಿಬ್ಯೋನಿನಲ್ಲಿರುವ ಉನ್ನತ ಸ್ಥಳಕ್ಕೆ ಹೋದರು. ಕರ್ತನ ಸೇವಕನಾದ ಮೋಶೆಯು ಅರಣ್ಯ ದಲ್ಲಿ ಮಾಡಿದ ದೇವರ ಸಭೆಯ ಗುಡಾರವು ಅಲ್ಲಿತ್ತು.
1:4b.2CH.001.004 ದಾವೀದನು ಕರ್ತನ ಮಂಜೂಷವನ್ನು ಕಿರ್ಯತ್ಯಾ ರೀಮಿನಿಂದ ತಾನು ಅದಕ್ಕೊಸ್ಕರ ಸಿದ್ಧಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬಂದಿದ್ದನು. ಯಾಕಂದರೆ ಅವನು ಯೆರೂಸಲೇಮಿನಲ್ಲಿ ಅದಕ್ಕೋಸ್ಕರ ಡೇರೆಯನ್ನು ಹಾಕಿ ಸಿದ್ದನು.
1:5b.2CH.001.005 ಇದಲ್ಲದೆ ಹೂರನ ಮಗನಾದ ಊರೀ ಯನ ಮಗನಾದ ಬೆಚಲೇಲನು ಮಾಡಿದ ತಾಮ್ರದ ಬಲಿಪೀಠವನ್ನು ಕರ್ತನ ಗುಡಾರದ ಮುಂದೆ ಇಟ್ಟನು. ಸೊಲೊಮೋನನೂ ಸಭೆಯೂ ಅದರ ಮುಂದೆ ವಿಚಾರಿಸುತ್ತಿದ್ದರು.
1:6b.2CH.001.006 ಆಗ ಸೊಲೊಮೋನನು ಸಭೆಯ ಗುಡಾರದ ಬಳಿಯಲ್ಲಿ ಕರ್ತನ ಮುಂದೆ ಇರುವ ತಾಮ್ರಪೀಠದ ಬಳಿಗೆ ಹೋಗಿ ಅದರ ಮೇಲೆ ಸಹಸ್ರ ದಹನಬಲಿಗಳನ್ನು ಅರ್ಪಿಸಿದನು.
1:7b.2CH.001.007 ಅದೇ ರಾತ್ರಿಯಲ್ಲಿ ದೇವರು ಸೊಲೊಮೋನನಿಗೆ ಕಾಣಿಸಿಕೊಂಡು--ನಾನು ನಿನಗೆ ಕೊಡಬೇಕಾದದ್ದನ್ನು ಕೇಳಿಕೋ ಅಂದನು.
1:8b.2CH.001.008 ಆಗ ಸೊಲೊಮೋನನು ದೇವ ರಿಗೆ--ನೀನು ನನ್ನ ತಂದೆಯಾದ ದಾವೀದನಿಗೆ ಬಹು ಕೃಪೆಯನ್ನು ತೋರಿಸಿ ಅವನಿಗೆ ಬದಲಾಗಿ ನಾನು ಆಳುವಂತೆ ಮಾಡಿದಿ.
1:9b.2CH.001.009 ಈಗ ಕರ್ತನಾದ ದೇವರೇ, ನನ್ನ ತಂದೆಯಾದ ದಾವೀದನಿಗೆ ನೀನು ಮಾಡಿದ ವಾಗ್ದಾನವು ಸ್ಥಾಪಿತವಾಗಲಿ, ಲೆಕ್ಕದಲ್ಲಿ ಧೂಳಿಯ ಹಾಗೆ ಹೆಚ್ಚಾಗಿರುವ ಜನರ ಮೇಲೆ ನನ್ನನ್ನು ಅರಸನಾಗ ಮಾಡಿದಿ.
1:10b.2CH.001.010 ನಾನು ಈ ಜನರ ಮುಂದೆ ಹೊರಡುವ ಹಾಗೆಯೂ ಬರುವ ಹಾಗೆಯೂ ನನಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಕೊಡು. ಈ ನಿನ್ನ ಮಹಾಜನಕ್ಕೆ ನ್ಯಾಯ ತೀರಿಸತಕ್ಕವನು ಯಾರು ಅಂದನು.
1:11b.2CH.001.011 ಆಗ ದೇವರು ಸೊಲೊಮೋನನಿಗೆ--ಇದು ನಿನ್ನ ಹೃದಯ ದಲ್ಲಿ ಇದ್ದದರಿಂದಲೂ ಐಶ್ವರ್ಯವನ್ನೂ ಸ್ಥಿತಿಯನ್ನೂ ಘನವನ್ನೂ ನಿನ್ನ ಶತ್ರುಗಳ ಪ್ರಾಣವನ್ನೂ ಹೆಚ್ಚಾದ ದಿವಸಗಳನ್ನೂ ನೀನು ಕೇಳದೆ ನಾನು ಯಾರ ಮೇಲೆ ನಿನ್ನನ್ನು ಅರಸನಾಗಿ ಮಾಡಿದೆನೋ ಆ ನನ್ನ ಜನರಿಗೆ ನ್ಯಾಯ ತೀರಿಸುವ ಹಾಗೆ ಜ್ಞಾನವನ್ನೂ ತಿಳುವಳಿಕೆ ಯನ್ನೂ ನೀನು ಕೇಳಿದ್ದರಿಂದ ಅವು ನಿನಗೆ ಕೊಡ ಲ್ಪಟ್ಟವು.
1:12b.2CH.001.012 ಇದಲ್ಲದೆ ನಿನಗಿಂತ ಮುಂಚೆ ಇದ್ದ ಅರಸುಗಳಲ್ಲಿ ಯಾರಿಗೂ ಇಲ್ಲದಂಥ ನಿನ್ನ ತರುವಾಯ ಯಾರಿಗೂ ಇರದಂಥ ಐಶ್ವರ್ಯವನ್ನೂ ಸ್ಥಿತಿಯನ್ನೂ ಘನವನ್ನೂ ಕೊಡುವೆನು ಅಂದನು.
1:13b.2CH.001.013 ತರುವಾಯ ಸೊಲೊಮೋನನು ಸಭೆಯ ಗುಡಾರವನ್ನು ಬಿಟ್ಟು ಗಿಬ್ಯೋನಿನಲ್ಲಿರುವ ಉನ್ನತ ಸ್ಥಳದಿಂದ ಯೆರೂಸ ಲೇಮಿಗೆ ಬಂದು ಇಸ್ರಾಯೇಲನ್ನು ಆಳಿದನು.
1:14b.2CH.001.014 ಸೊಲೊಮೋನನು ರಥಗಳನ್ನೂ ರಾಹುತರನ್ನೂ ಕೂಡಿಸಿದನು. ಅವನ ರಥಗಳು ಸಾವಿರದ ನಾನೂರು ರಾಹುತರು ಹನ್ನೆರಡು ಸಾವಿರ, ಇವರನ್ನು ರಥದ ಪಟ್ಟಣಗಳಲ್ಲಿಯೂ ಯೆರೂಸಲೇಮಿನಲ್ಲಿ ಅರಸನ ಬಳಿಯಲ್ಲಿಯೂ ಇರಿಸಿದನು.
1:15b.2CH.001.015 ಅರಸನು ಯೆರೂ ಸಲೇಮಿನಲ್ಲಿ ಬೆಳ್ಳಿಬಂಗಾರವನ್ನು ಕಲ್ಲುಗಳ ಹಾಗೆಯೂ ದೇವದಾರು ಮರಗಳನ್ನು ತಗ್ಗಿನಲ್ಲಿರುವ ಆಲದ ಮರ ಗಳ ಹಾಗೆಯೂ ಮಾಡಿದನು.
1:16b.2CH.001.016 ಇದಲ್ಲದೆ ಸೊಲೊ ಮೋನನಿಗೋಸ್ಕರ ಐಗುಪ್ತದಿಂದ ಕುದುರೆಗಳೂ ಸಣ ಬಿನ ನೂಲೂ ತರಲ್ಪಟ್ಟವು; ಅರಸನ ವರ್ತಕರು ಈ ಸಣಬಿನ ನೂಲನ್ನು ಕ್ರಯಕ್ಕೆ ತೆಗೆದುಕೊಂಡರು.ಹಾಗೆಯೇ ಐಗುಪ್ತದಿಂದ ಒಂದು ರಥಕ್ಕೆ ಆರು ನೂರು ಬೆಳ್ಳಿ ಶೇಕೆಲುಗಳ ಕ್ರಯವಾಗಿ ತಕ್ಕೊಂಡರು. ಒಂದು ಕುದುರೆಗೆ ನೂರೈವತ್ತು ಬೆಳ್ಳಿ ಶೇಕೆಲುಗಳ ಕ್ರಯವಾಗಿ ತರಿಸಿದರು. ಈ ಪ್ರಕಾರ ಹಿತ್ತಿಯರ ಅರಸುಗಳೆಲ್ಲರೂ ಅರಾಮಿನ ಅರಸುಗಳೆಲ್ಲರೂ ಅವರ ಮೂಲಕವಾಗಿ ತರಿಸಿಕೊಂಡರು.
1:17b.2CH.001.017 ಹಾಗೆಯೇ ಐಗುಪ್ತದಿಂದ ಒಂದು ರಥಕ್ಕೆ ಆರು ನೂರು ಬೆಳ್ಳಿ ಶೇಕೆಲುಗಳ ಕ್ರಯವಾಗಿ ತಕ್ಕೊಂಡರು. ಒಂದು ಕುದುರೆಗೆ ನೂರೈವತ್ತು ಬೆಳ್ಳಿ ಶೇಕೆಲುಗಳ ಕ್ರಯವಾಗಿ ತರಿಸಿದರು. ಈ ಪ್ರಕಾರ ಹಿತ್ತಿಯರ ಅರಸುಗಳೆಲ್ಲರೂ ಅರಾಮಿನ ಅರಸುಗಳೆಲ್ಲರೂ ಅವರ ಮೂಲಕವಾಗಿ ತರಿಸಿಕೊಂಡರು.
2
2:1b.2CH.002.001 ಆದರೆ ಸೊಲೊಮೋನನು ಕರ್ತನ ಹೆಸರಿಗೋಸ್ಕರ ಮನೆಯನ್ನೂ ತನ್ನ ರಾಜ್ಯ ಕ್ಕೋಸ್ಕರ ಮನೆಯನ್ನೂ ಕಟ್ಟಿಸುವದಕ್ಕೆ ತೀರ್ಮಾ ನಿಸಿಕೊಂಡನು;
2:2b.2CH.002.002 ಆದದರಿಂದ ಸೊಲೊಮೋನನು ಎಪ್ಪತ್ತು ಸಾವಿರ ಹೊರೆಹೊರುವವರನ್ನೂ ಬೆಟ್ಟದಲ್ಲಿ ಎಂಭತ್ತು ಸಾವಿರ ಕಡಿಯುವವರನ್ನೂ ಈ ಕೆಲಸದವರ ಮೇಲ್ವಿಚಾರಕರಾಗಿರಲು ಮೂರು ಸಾವಿರದ ಆರು ನೂರು ಮಂದಿಯನ್ನೂ ಲೆಕ್ಕಿಸಿ ನೇಮಿಸಿದನು.
2:3b.2CH.002.003 ಇದ ಲ್ಲದೆ ಸೊಲೊಮೋನನು ತೂರಿನ ಅರಸನಾದ ಹೂರಾಮನಿಗೆ--ವಾಸವಾಗಿರುವ ಮನೆಯನ್ನು ತನಗೆ ಕಟ್ಟಿಸಲು ನೀನು ನನ್ನ ತಂದೆಯಾದ ದಾವೀದನಿಗೆ ದೇವದಾರು ಮರಗಳನ್ನು ಕಳುಹಿಸಿ ಅವನಿಗೋಸ್ಕರ ಹೇಗೆ ಮಾಡಿದಿಯೋ ಹಾಗೆಯೇ ನನಗೂ ಮಾಡು.
2:4b.2CH.002.004 ಇಗೋ, ನನ್ನ ದೇವರಾದ ಕರ್ತನಿಗೆ ಅದನ್ನು ಪ್ರತಿಷ್ಠೆ ಮಾಡುವದಕ್ಕೂ ಆತನ ಮುಂದೆ ಪರಿಮಳ ಧೂಪವನ್ನು ಸುಡುವದಕ್ಕೂ ನಿತ್ಯ ಸಮ್ಮುಖದ ರೊಟ್ಟಿ ಗೋಸ್ಕರವೂ ಸಬ್ಬತ್ತುಗಳಲ್ಲಿಯೂ ಅಮಾವಾಸ್ಯೆಗಳ ಲ್ಲಿಯೂ ಇಸ್ರಾಯೇಲಿಗೆ ನಿರಂತರವಾಗಿರಲು ನೇಮಿ ಸಿದ ನಮ್ಮ ದೇವರಾದ ಕರ್ತನ ಹಬ್ಬಗಳಲ್ಲಿಯೂ ಉದಯಕಾಲದ ಸಾಯಂಕಾಲದ ದಹನಬಲಿಗಳಿಗೋ ಸ್ಕರವೂ ಆತನ ನಾಮಕ್ಕೆ ಆಲಯವನ್ನು ಕಟ್ಟಿಸುತ್ತೇನೆ.
2:5b.2CH.002.005 ನಾನು ಕಟ್ಟಿಸುವ ಆಲಯವು ದೊಡ್ಡದು; ನಮ್ಮ ದೇವರು ಸಕಲ ದೇವರುಗಳಿಗಿಂತ ದೊಡ್ಡವನಾಗಿದ್ದಾನೆ.
2:6b.2CH.002.006 ಆತನಿಗೆ ಮನೆಯನ್ನು ಕಟ್ಟಿಸಲು ಶಕ್ತಿಯನ್ನು ಹೊಂದಿ ದವನು ಯಾರು? ಆಕಾಶಗಳೂ ಆಕಾಶಾಕಾಶಗಳೂ ಆತನನ್ನು ಹಿಡಿಯಲಾರವು; ಆತನ ಮುಂದೆ ಯಜ್ಞ ವನ್ನು ಸುಡುವದಕ್ಕೆ ಹೊರತಾಗಿ ಆತನಿಗೆ ಮನೆಯನ್ನು ಕಟ್ಟಿಸಲು ನಾನು ಎಷ್ಟರವನು?
2:7b.2CH.002.007 ಆದದರಿಂದ ಬಂಗಾರ ದಲ್ಲಿಯೂ ಬೆಳ್ಳಿಯಲ್ಲಿಯೂ ತಾಮ್ರದಲ್ಲಿಯೂ ಕಬ್ಬಿಣ ದಲ್ಲಿಯೂ ರಕ್ತವರ್ಣ ಲೋಹಿತವರ್ಣ ನೀಲವರ್ಣ ಗಳಲ್ಲಿಯೂ ಕೆಲಸವನ್ನು ಮಾಡಲು ಜ್ಞಾನವುಳ್ಳವನಾ ಗಿಯೂ ನನ್ನ ತಂದೆಯಾದ ದಾವೀದನು ಸಿದ್ಧ ಮಾಡಿದ ಯೆಹೂದದಲ್ಲಿಯೂ ಯೆರೂಸಲೇಮಿನಲ್ಲಿಯೂ ನನ್ನ ಬಳಿಯಲ್ಲಿರುವ ಗ್ರಹಿಕೆಯುಳ್ಳವರ ಸಂಗಡ ಕೆತ್ತಲು ತಿಳುವಳಿಕೆಯುಳ್ಳವನಾಗಿಯೂ ಇರುವವನನ್ನು ನನ್ನ ಬಳಿಗೆ ಕಳುಹಿಸು.
2:8b.2CH.002.008 ಇದಲ್ಲದೆ ನೀನು ಇಲ್ಲಿಗೆ ದೇವದಾರು ಮರಗಳನ್ನೂ ತುರಾಯಿಮರಗಳನ್ನೂ ಸುಗಂಧದ ಮರಗಳನ್ನೂ ಲೆಬನೋನಿನಿಂದ ನನಗೆ ಕಳುಹಿಸು. ಲೆಬನೋನಿನಲ್ಲಿ ಮರಗಳನ್ನು ಕಡಿಯಲು ನಿನ್ನ ಸೇವ ಕರು ಜಾಣರಾಗಿದ್ದಾರೆ.
2:9b.2CH.002.009 ಇಗೋ, ನನಗೋಸ್ಕರ ಮರ ಗಳನ್ನು ಬಹಳವಾಗಿ ಸಿದ್ಧಮಾಡುವದಕ್ಕೆ ನನ್ನ ಸೇವಕರು ನಿನ್ನ ಸೇವಕರ ಸಂಗಡ ಇರುವರು. ನಾನು ಕಟ್ಟಿಸುವ ಆಲಯವು ದೊಡ್ಡದಾಗಿಯೂ ಆಶ್ಚರ್ಯವಾದದ್ದಾ ಗಿಯೂ ಇರುವದು.
2:10b.2CH.002.010 ಇಗೋ, ನಾನು ಮರಗಳನ್ನು ಕಡಿಯುವ ನಿನ್ನ ಸೇವಕರಿಗೆ ಇಪ್ಪತ್ತು ಸಾವಿರ ಅಳತೆ ಗೋಧಿಯನ್ನೂ ಇಪ್ಪತ್ತು ಸಾವಿರ ಅಳತೆ ಜವೆಗೋಧಿ ಯನ್ನೂ ಇಪ್ಪತ್ತು ಸಾವಿರ ಅಳತೆ ದ್ರಾಕ್ಷಾರಸವನ್ನೂ ಇಪ್ಪತ್ತು ಸಾವಿರ ಅಳತೆ ಎಣ್ಣೆಯನ್ನೂ ಕೊಡುವೆನು ಅಂದನು.
2:11b.2CH.002.011 ಆಗ ತೂರಿನ ಅರಸನಾದ ಹಿರಾಮನು ಪ್ರತ್ಯು ತ್ತರವನ್ನು ಬರೆದು ಸೊಲೊಮೋನನಿಗೆ ಕಳುಹಿಸಿಕರ್ತನು ತನ್ನ ಜನರನ್ನು ಪ್ರೀತಿ ಮಾಡಿದ್ದರಿಂದ ಆತನು ನಿನ್ನನ್ನು ಅವರ ಮೇಲೆ ಅರಸನಾಗಲು ಮಾಡಿದ್ದಾನೆ ಎಂದು ಹೇಳಿದನು.
2:12b.2CH.002.012 ಇದಲ್ಲದೆ ಹಿರಾಮನು ಕರ್ತ ನಿಗೋಸ್ಕರ ಮನೆಯನ್ನೂ ತನ್ನ ರಾಜ್ಯಕ್ಕೋಸ್ಕರ ಮನೆ ಯನ್ನೂ ಕಟ್ಟಿಸುವದಕ್ಕೆ ಅರಸನಾದ ದಾವೀದನಿಗೆ ಜ್ಞಾನವುಳ್ಳಂಥ ಬುದ್ಧಿಯನ್ನು ಗ್ರಹಿಕೆಯನ್ನು ತಿಳು ಕೊಂಡಂಥ ಮಗನನ್ನು ಕೊಟ್ಟು, ಆಕಾಶವನ್ನೂ ಭೂಮಿ ಯನ್ನೂ ಉಂಟುಮಾಡಿದ ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿಸಲ್ಪಡಲಿ.
2:13b.2CH.002.013 ಈಗ ನಾನು ಜ್ಞಾನವಂತ ನಾದಂಥ ಗ್ರಹಿಕೆಯನ್ನು ತಿಳಿದುಕೊಂಡಂಥ ಮನುಷ್ಯ ನನ್ನು ಕಳುಹಿಸಿದ್ದೇನೆ.
2:14b.2CH.002.014 ಅವನು ದಾನನ ಕುಮಾರ್ತೆ ಗಳಲ್ಲಿರುವ ಒಬ್ಬಳ ಮಗನಾಗಿದ್ದಾನೆ; ಅವನ ತಂದೆ ತೂರಿನ ಮನುಷ್ಯನು; ಅವನು ಬಂಗಾರ ಬೆಳ್ಳಿ ತಾಮ್ರ ಕಬ್ಬಿಣ ಕಲ್ಲು ಮರ ಧೂಮ್ರವರ್ಣ ನೀಲವರ್ಣ ರಕ್ತವರ್ಣ ನಾರಿನ ವಸ್ತ್ರ, ಇವುಗಳಲ್ಲಿ ಕೆಲಸವನ್ನು ಮಾಡುವದಕ್ಕೂ ಕೌಶಲ್ಯವುಳ್ಳ ನಿನ್ನ ಜನರ ಸಂಗಡವೂ ನಿನ್ನ ತಂದೆಯೂ ನನ್ನ ಒಡೆಯನೂ ಆದ ದಾವೀದನ ಕೌಶಲ್ಯವುಳ್ಳವರ ಸಂಗಡವೂ ಅವನು ತನಗೆ ಹೇಳಿದ ಸಮಸ್ತ ಕಲೆಯನ್ನು ಗ್ರಹಿಸುವದಕ್ಕೂ ಬಲ್ಲವನಾಗಿ ದ್ದಾನೆ.
2:15b.2CH.002.015 ಈಗ ನನ್ನ ಒಡೆಯನು ಹೇಳಿದ ಆ ಗೋಧಿಯನ್ನೂ ಜವೆಗೋಧಿಯನ್ನೂ ಎಣ್ಣೆಯನ್ನೂ ದ್ರಾಕ್ಷಾ ರಸವನ್ನೂ ತನ್ನ ಸೇವಕರಿಗೆ ಕಳುಹಿಸಲಿ.
2:16b.2CH.002.016 ನಾವು ಲೆಬನೋನಿನಲ್ಲಿ ನಿನಗೆ ಬೇಕಾದಷ್ಟು ಮರಗಳನ್ನು ಕಡಿದು ತೆಪ್ಪಗಳಲ್ಲಿ ಸಮುದ್ರದ ಮಾರ್ಗವಾಗಿ ಯೊಪ್ಪಕ್ಕೆ ತಕ್ಕೊಂಡು ಬರುತ್ತೇವೆ; ನೀನು ಅವುಗ ಳನ್ನು ಯೆರೂಸಲೇಮಿಗೆ ಒಯ್ಯಬಹುದು.
2:17b.2CH.002.017 ಸೊಲೊ ಮೋನನು ಇಸ್ರಾಯೇಲ್ ದೇಶದಲ್ಲಿದ್ದ ಅನ್ಯದೇಶ ಸ್ಥರನ್ನು ಲೆಕ್ಕಿಸಿದನು; ತನ್ನ ತಂದೆಯಾದ ದಾವೀದನು ಅವರನ್ನು ಲೆಕ್ಕಿಸಿದ ತರುವಾಯ ತಾನೂ ಲೆಕ್ಕಿಸಿದನು; ಅವರು ಲಕ್ಷದ ಐವತ್ತಮೂರು ಸಾವಿರದ ಆರುನೂರು ಮಂದಿ ಕಂಡುಬಂದರು.ಅವರಲ್ಲಿ ಎಪ್ಪತ್ತು ಸಾವಿರ ಮಂದಿಯನ್ನು ಹೊರೆಹೊರುವದಕ್ಕೂ ಎಂಭತ್ತು ಸಾವಿರ ಮಂದಿಯನ್ನು ಬೆಟ್ಟದಲ್ಲಿ ಕಲ್ಲು ಕಡಿಯುವ ದಕ್ಕೂ ಮೂರು ಸಾವಿರದ ಆರು ನೂರು ಮಂದಿ ಯನ್ನು ಕೆಲಸದವರ ಮೇಲೆ ಮೇಲ್ವಿಚಾರಣೆಗಾಗಿಯೂ ಇರಿಸಿದನು.
2:18b.2CH.002.018 ಅವರಲ್ಲಿ ಎಪ್ಪತ್ತು ಸಾವಿರ ಮಂದಿಯನ್ನು ಹೊರೆಹೊರುವದಕ್ಕೂ ಎಂಭತ್ತು ಸಾವಿರ ಮಂದಿಯನ್ನು ಬೆಟ್ಟದಲ್ಲಿ ಕಲ್ಲು ಕಡಿಯುವ ದಕ್ಕೂ ಮೂರು ಸಾವಿರದ ಆರು ನೂರು ಮಂದಿ ಯನ್ನು ಕೆಲಸದವರ ಮೇಲೆ ಮೇಲ್ವಿಚಾರಣೆಗಾಗಿಯೂ ಇರಿಸಿದನು.
3
3:1b.2CH.003.001 ಆಗ ಸೊಲೊಮೋನನು ಯೆರೂಸಲೇಮಿನಲ್ಲಿ ತನ್ನ ತಂದೆಯಾದ ದಾವೀದನಿಗೆ ಕರ್ತನು ಕಾಣಿಸಿಕೊಂಡ ಸ್ಥಳವಾದ ಮೋರೀಯಾ ಬೆಟ್ಟದ ಮೇಲೆ ದಾವೀದನು ಸಿದ್ಧಮಾಡಿದ ಯೆಬೂಸಿ ಯನಾದ ಒರ್ನಾನನ ಕಣದಲ್ಲಿ ಕರ್ತನ ಆಲಯವನ್ನು ಕಟ್ಟಲು ಪ್ರಾರಂಭಿಸಿದನು.
3:2b.2CH.003.002 ಅವನು ತನ್ನ ಆಳಿಕೆಯ ನಾಲ್ಕನೇ ವರುಷದ ಎರಡನೇ ತಿಂಗಳಿನ ಎರಡನೇ ದಿವಸದಲ್ಲಿ ಕಟ್ಟುವದಕ್ಕೆ ಆರಂಭಿಸಿದನು.
3:3b.2CH.003.003 ದೇವರ ಆಲಯವನ್ನು ಕಟ್ಟುವದಕ್ಕೆ ಸೊಲೊಮೋನನು ಹಾಕಿ ಸಿದ ಅಸ್ತಿವಾರಗಳು ಏನಂದರೆ ಮೊದಲಿನ ಅಳತೆಯ ಪ್ರಕಾರವಾಗಿ ಅದರ ಉದ್ದ ಅರವತ್ತು ಮೊಳವು ಅಗಲ ಇಪ್ಪತ್ತು ಮೊಳವು.
3:4b.2CH.003.004 ಮುಂದೆ ಇರುವ ದ್ವಾರಾಂಗಳ ಆಲಯದ ಅಗಲದ ಪ್ರಕಾರ ಇಪ್ಪತ್ತು ಮೊಳ ಉದ್ದವಾಗಿತ್ತು. ಮತ್ತು ನೂರ ಇಪ್ಪತ್ತು ಮೊಳ ಎತ್ತರವಾಗಿತ್ತು. ಅವನು ಅದನ್ನು ಒಳಗಡೆ ಶುದ್ಧ ಬಂಗಾರದಿಂದ ಹೊದಿಗಿಸಿದನು.
3:5b.2CH.003.005 ಅವನು ದೊಡ್ಡ ಆಲಯವನ್ನು ತುರಾಯಿ ಮರಗಳಿಂದ ಮುಚ್ಚಿ ಅದನ್ನು ಶುದ್ಧ ಬಂಗಾರದಿಂದ ಹೊದಿಸಿ ಅದರ ಮೇಲೆ ಖರ್ಜೂರದ ಗಿಡಗಳನ್ನೂ ಸರಪಣಿಗಳನ್ನೂ ಕೆತ್ತಿಸಿ ದನು.
3:6b.2CH.003.006 ಸೌಂದರ್ಯದ ನಿಮಿತ್ತವಾಗಿ ಅಮೂಲ್ಯ ವಾದ ಕಲ್ಲುಗಳಿಂದ ಆ ಆಲಯವನ್ನು ಮುಚ್ಚಿದನು. ಅದರ ಬಂಗಾರವು ಪರ್ವಯಿಮಿನ ಬಂಗಾರವು.
3:7b.2CH.003.007 ಆಲಯದ ತೊಲೆಗಳನ್ನೂ ಸ್ತಂಭಗಳನ್ನೂ ಗೋಡೆ ಗಳನ್ನೂ ಬಾಗಲುಗಳನ್ನೂ ಅವನು ಬಂಗಾರದಿಂದ ಹೊದಿಸಿ ಗೋಡೆಗಳ ಮೇಲೆ ಕೆರೂಬಿಗಳ ಚಿತ್ರಗಳನ್ನ್ನು ಕೆತ್ತಿಸಿದನು.
3:8b.2CH.003.008 ಇದಲ್ಲದೆ ಅತಿಪರಿಶುದ್ಧವಾದ ಆಲಯವನ್ನು ಮಾಡಿದನು; ಅದರ ಉದ್ದವು ಆಲಯದ ಅಗಲದ ಪ್ರಕಾರ ಇಪ್ಪತ್ತು ಮೊಳ; ಅಗಲ ಇಪ್ಪತ್ತು ಮೊಳವಾಗಿ ಇತ್ತು. ಅವನು ಅದನ್ನು ಆರು ನೂರು ತಲಾಂತುಗಳ ಶುದ್ಧ ಬಂಗಾರದಿಂದ ಹೊದಿಸಿದನು.
3:9b.2CH.003.009 ಅದರ ಮೊಳೆ ಗಳು ಐವತ್ತು ಶೇಕೆಲುಗಳ ತೂಕ ಬಂಗಾರದ್ದಾಗಿದ್ದವು. ಹಾಗೆಯೇ ಮೇಲಿನ ಕೊಠಡಿಗಳನ್ನು ಬಂಗಾರದಿಂದ ಹೊದಿಸಿದನು.
3:10b.2CH.003.010 ಅತಿಪರಿಶುದ್ಧವಾದ ಆಲಯದಲ್ಲಿ ವಿಚಿತ್ರ ಕೆಲಸವಾದ ಎರಡು ಕೆರೂಬಿಗಳ ಪ್ರತಿಮೆ ಗಳನ್ನು ಮಾಡಿಸಿ ಬಂಗಾರದಿಂದ ಹೊದಿಸಿದನು.
3:11b.2CH.003.011 ಕೆರೂಬಿಗಳ ರೆಕ್ಕೆಗಳು ಇಪ್ಪತ್ತು ಮೊಳ ಉದ್ದವಾಗಿ ದ್ದವು. ಒಂದು ರೆಕ್ಕೆಯು ಐದು ಮೊಳವಾಗಿದ್ದು ಆಲ ಯದ ಗೋಡೆಯ ವರೆಗೆ ಮುಟ್ಟಿತ್ತು; ಮತ್ತೊಂದು ರೆಕ್ಕೆ ಐದು ಮೊಳವಾಗಿದ್ದು ಇನ್ನೊಂದು ಕೆರೂಬಿಯ ರೆಕ್ಕೆಯ ವರೆಗೂ ಮುಟ್ಟಿತ್ತು.
3:12b.2CH.003.012 ಹಾಗೆಯೇ ಮತ್ತೊಂದು ಕೆರೂಬಿಯ ರೆಕ್ಕೆಯು ಐದು ಮೊಳವಾಗಿದ್ದು ಆಲಯದ ಗೋಡೆಯ ವರೆಗೆ ಮುಟ್ಟಿತ್ತು; ಇನ್ನೊಂದು ರೆಕ್ಕೆಯು ಐದು ಮೊಳವಾಗಿದ್ದು ಬೇರೆ ಇರುವ ಕೆರೂಬಿಯ ರೆಕ್ಕೆಗೆ ಕೂಡಿ ಕೊಂಡಿತ್ತು.
3:13b.2CH.003.013 ಈ ಕೆರೂಬಿಗಳ ರೆಕ್ಕೆಗಳು ಇಪ್ಪತ್ತು ಮೊಳಗಳ ವರೆಗೆ ಚಾಚಿಕೊಂಡವು; ಅವು ತಮ್ಮ ಕಾಲುಗಳ ಮೇಲೆ ನಿಂತವು; ಅವುಗಳ ಮುಖ ಗಳು ಒಳಪಾರ್ಶ್ವವಾಗಿದ್ದವು.
3:14b.2CH.003.014 ತೆರೆಯನ್ನು ನೀಲ ಧೂಮ್ರ ರಕ್ತವರ್ಣಗಳಿಂದಲೂ ನಯವಾದ ನಾರಿನ ವಸ್ತ್ರದಿಂದಲೂ ಮಾಡಿಸಿ ಅದರಲ್ಲಿ ಕೆರೂಬಿಗಳನ್ನು ಮಾಡಿಸಿದನು.
3:15b.2CH.003.015 ಇದಲ್ಲದೆ ಅವನು ಆಲಯದ ಮುಂದೆ ಮೂವ ತ್ತೈದು ಮೊಳ ಉದ್ದವಾದ ಎರಡು ಸ್ತಂಭಗಳನ್ನು ಮಾಡಿಸಿದನು; ಒಂದೊಂದರ ತುದಿಯ ಮೇಲೆ ಐದು ಮೊಳ ಉದ್ದ ಬೋದಿಗೆಯನ್ನು ಇಟ್ಟನು.
3:16b.2CH.003.016 ಅವನು ದೈವೋಕ್ತಿಯ ಸ್ಥಾನದಲ್ಲಿರುವ ಹಾಗೆ ಸರಪಣಿಗಳನ್ನು ಮಾಡಿ ಸ್ತಂಭಗಳ ತುದಿಗಳ ಮೇಲೆ ಇಟ್ಟು ನೂರು ದಾಳಿಂಬರ ಹಣ್ಣುಗಳನ್ನು ಮಾಡಿ ಸರಪಣಿಗಳ ಮೇಲೆ ಇರಿಸಿದನು.ಮಂದಿರದ ಮುಂದೆ ಆ ಸ್ತಂಭಗಳಲ್ಲಿ ಒಂದನ್ನು ಬಲಪಾರ್ಶ್ವದಲ್ಲಿಯೂ ಒಂದನ್ನು ಎಡ ಪಾರ್ಶ್ವದಲ್ಲಿಯೂ ನಿಲ್ಲಿಸಿದನು; ಬಲಪಾರ್ಶ್ವದಲ್ಲಿ ಇದ್ದ ಸ್ತಂಭಕ್ಕೆ ಯಾಕೀನ್ ಎಂದೂ ಎಡಪಾರ್ಶ್ವದಲ್ಲಿದ್ದ ಸ್ತಂಭಕ್ಕೆ ಬೋವಜ್ ಎಂದೂ ಹೆಸರಿಟ್ಟನು.
3:17b.2CH.003.017 ಮಂದಿರದ ಮುಂದೆ ಆ ಸ್ತಂಭಗಳಲ್ಲಿ ಒಂದನ್ನು ಬಲಪಾರ್ಶ್ವದಲ್ಲಿಯೂ ಒಂದನ್ನು ಎಡ ಪಾರ್ಶ್ವದಲ್ಲಿಯೂ ನಿಲ್ಲಿಸಿದನು; ಬಲಪಾರ್ಶ್ವದಲ್ಲಿ ಇದ್ದ ಸ್ತಂಭಕ್ಕೆ ಯಾಕೀನ್ ಎಂದೂ ಎಡಪಾರ್ಶ್ವದಲ್ಲಿದ್ದ ಸ್ತಂಭಕ್ಕೆ ಬೋವಜ್ ಎಂದೂ ಹೆಸರಿಟ್ಟನು.
4
4:1b.2CH.004.001 ಇದಲ್ಲದೆ ಅವನು ತಾಮ್ರದ ಬಲಿಪೀಠ ವನ್ನು ಮಾಡಿದನು. ಅದರ ಉದ್ದ ಇಪ್ಪತ್ತು ಮೊಳ, ಅಗಲ ಇಪ್ಪತ್ತು ಮೊಳ, ಎತ್ತರ ಹತ್ತು ಮೊಳ.
4:2b.2CH.004.002 ಅವನು ಎರಕದ ಸಮುದ್ರವನ್ನು ಮಾಡಿಸಿದನು; ಅದು ಸುತ್ತಲಾಗಿ ಈ ಅಂಚಿನಿಂದ ಆ ಅಂಚಿಗೆ ಹತ್ತು ಮೊಳ, ಅದರ ಎತ್ತರ ಐದು ಮೊಳ, ಸುತ್ತಳತೆ ಮೂವತ್ತು ಮೊಳ ನೂಲಳತೆಯಾಗಿತ್ತು.
4:3b.2CH.004.003 ಅದರ ಕೆಳಭಾಗದಲ್ಲಿ ಸುತ್ತಲೂ ಎತ್ತುಗಳ ರೂಪಗಳಿದ್ದವು; ಅವು ಒಂದೊಂದು ಮೊಳಕ್ಕೆ ಹತ್ತಾಗಿ ಆ ಸಮುದ್ರದ ಸುತ್ತಲೂ ಇದ್ದವು. ಇದು ಎರಕ ಹೊಯ್ಯಲ್ಪಡುವಾಗ ಎತ್ತುಗಳ ರೂಪ ಎರಡು ಸಾಲಾಗಿ ಎರಕ ಹೊಯ್ಯ ಲ್ಪಟ್ಟಿದ್ದವು.
4:4b.2CH.004.004 ಅದು ಹನ್ನೆರಡು ಎತ್ತುಗಳ ಮೇಲೆ ನಿಂತಿತ್ತು. ಮೂರು ಉತ್ತರಕ್ಕೂ ಮೂರು ಪಶ್ಚಿಮಕ್ಕೂ ಮೂರು ದಕ್ಷಿಣಕ್ಕೂ ಮೂರು ಪೂರ್ವಕ್ಕೂ ನೋಡು ತ್ತಿದ್ದವು. ಆ ಸಮುದ್ರವು ಅವುಗಳ ಮೇಲೆ ಇತ್ತು,
4:5b.2CH.004.005 ಅವುಗಳ ಹಿಂಭಾಗಗಳೆಲ್ಲಾ ಒಳಗಾಗಿದ್ದವು. ಅದರ ದಪ್ಪವು ನಾಲ್ಕು ಬೆರಳಷ್ಟಾಗಿಯೂ ಅದರ ಅಂಚು ಪಾತ್ರೆಯ ಅಂಚಿನ ಹಾಗೆಯೂ ತಾವರೆ ಪುಷ್ಪದ ಹಾಗೆಯೂ ಇತ್ತು; ಅದು ಮೂರು ಸಾವಿರ ಕೊಳಗ ಹಿಡಿಯುವದಾಗಿತ್ತು.
4:6b.2CH.004.006 ಇದಲ್ಲದೆ ಹತ್ತು ತೊಟ್ಟಿಗಳನ್ನು ಮಾಡಿಸಿ ಅವುಗಳಲ್ಲಿ ದಹನಬಲಿಗೋಸ್ಕರ ಅರ್ಪಿಸು ವವುಗಳನ್ನು ತೊಳೆಯುವ ನಿಮಿತ್ತವಾಗಿ ಬಲಪಾರ್ಶ್ವ ದಲ್ಲಿ ಐದನ್ನೂ ಎಡಪಾರ್ಶ್ವದಲ್ಲಿ ಐದನ್ನೂ ಇರಿಸಿ ದನು. ಆದರೆ ಆ ಸಮುದ್ರವು ಯಾಜಕರಿಗೋಸ್ಕರ ತೊಳೆಯುವದಕ್ಕೆ ಇತ್ತು.
4:7b.2CH.004.007 ಅವುಗಳ ಮಾದರಿಯ ಪ್ರಕಾರವಾಗಿ ಹತ್ತು ಬಂಗಾರದ ದೀಪಸ್ತಂಭಗಳನ್ನು ಮಾಡಿಸಿ ಮಂದಿರದಲ್ಲಿ ಬಲಗಡೆ ಐದನ್ನೂ ಎಡಗಡೆ ಐದನ್ನೂ ಇರಿಸಿದನು.
4:8b.2CH.004.008 ಹಾಗೆಯೇ ಅವನು ಹತ್ತು ಮೇಜುಗಳನ್ನು ಮಾಡಿಸಿ ಮಂದಿರದಲ್ಲಿ ಬಲಗಡೆ ಐದನ್ನೂ ಎಡಗಡೆ ಐದನ್ನೂ ಇರಿಸಿದನು. ನೂರು ಬಂಗಾರದ ಬೋಗುಣಿಗಳನ್ನು ಮಾಡಿಸಿದನು.
4:9b.2CH.004.009 ಇದ ಲ್ಲದೆ ಅವನು ಯಾಜಕರ ಅಂಗಳವನ್ನೂ ದೊಡ್ಡ ಅಂಗಳವನ್ನೂ ಅಂಗಳಗಳಿಗೋಸ್ಕರ ಬಾಗಲುಗಳನ್ನೂ ಮಾಡಿಸಿ
4:10b.2CH.004.010 ಸಮುದ್ರವನ್ನು ತಾಮ್ರದಿಂದ ಹೊದಿಸಿ ದನು. ಸಮುದ್ರವನ್ನು ಪೂರ್ವ ಭಾಗದ ಬಲ ಪಾರ್ಶ್ವ ದಲ್ಲಿ ದಕ್ಷಿಣಕ್ಕೆ ಎದುರಾಗಿ ಇರಿಸಿದನು.
4:11b.2CH.004.011 ಹೂರಾಮನು ಪಾತ್ರೆಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಹೀಗೆಯೇ ಹೂರಾ ಮನು ದೇವರ ಆಲಯಕ್ಕೋಸ್ಕರ ಅರಸನಾದ ಸೊಲೊ ಮೋನನಿಗೆ ಮಾಡಬೇಕಾದ ಕಾರ್ಯವನ್ನು ಮಾಡಿ ತೀರಿಸಿದನು.
4:12b.2CH.004.012 ಎರಡು ಸ್ತಂಭಗಳನ್ನೂ ಎರಡು ಸ್ತಂಭ ಗಳ ಮೇಲಿರುವ ಬೋದಿಗೆಗಳನ್ನೂ ಬೋದಿಗೆಗಳ ಮೇಲೆ ಮುಚ್ಚುವ ಎರಡು ಜಾಲರು ಹಣಿತೆಗಳನ್ನೂ
4:13b.2CH.004.013 ಕಂಬಗಳ ಮೇಲಿರುವ ಎರಡು ಬೋದಿಗೆಗಳನ್ನೂ ಮುಚ್ಚತಕ್ಕದ್ದಾದ ಒಂದೊಂದು ಜಾಲರು ಹೆಣಿತಕ್ಕೆ ಎರಡು ಸಾಲು ದಾಳಿಂಬರ ಕಾಯಿಗಳನ್ನೂ ಜಾಲರು ಹಣಿತೆಗಳಿಗೆ ನಾನೂರು ದಾಳಿಂಬರ ಕಾಯಿಗಳನ್ನೂ ಮಾಡಿದನು.
4:14b.2CH.004.014 ಇದಲ್ಲದೆ ಅವನು ಆಧಾರಗಳನ್ನೂ ಅದರ ಮೇಲೆ ಇರುವ ತೊಟ್ಟಿಗಳನ್ನೂ ಮಾಡಿದನು.
4:15b.2CH.004.015 ಒಂದು ಸಮುದ್ರವನ್ನೂ ಅದರ ಕೆಳಗೆ ಇರುವ ಹನ್ನೆರಡು ಎತ್ತುಗಳನ್ನೂ ಪಾತ್ರೆಗಳನ್ನೂ ಸಲಿಕೆಗಳನ್ನೂ ಕೊಂಡಿಗಳನ್ನೂ
4:16b.2CH.004.016 ಅವುಗಳ ಎಲ್ಲಾ ಸಾಮಾನುಗಳನ್ನೂ ಅರಸನಾದ ಸೊಲೊಮೋನನಿಗೆ ಅವನ ತಂದೆಯಾದ ಹೂರಾಮನು ಹೊಳೆಯುವ ತಾಮ್ರದಿಂದ ಕರ್ತನ ಆಲಯಕ್ಕೋಸ್ಕರ ಮಾಡಿದನು.
4:17b.2CH.004.017 ಯೊರ್ದನಿನ ತಗ್ಗಿ ನಲ್ಲಿ ಸುಕ್ಕೋತಿಗೂ ಚೆರೇದಕ್ಕೂ ನಡುವೆ ಇರುವ ಜೇಡಿಮಣ್ಣಿನ ಸ್ಥಳದಲ್ಲಿ ಅರಸನು ಅವುಗಳನ್ನು ಎರಕ ಹೊಯಿಸಿದನು.
4:18b.2CH.004.018 ಹೀಗೆ ಸೊಲೊಮೋನನು ಈ ಸಾಮಾನುಗಳನ್ನೆಲ್ಲಾ ಬಹಳವಾಗಿ ಮಾಡಿಸಿದನು.ಆ ತಾಮ್ರದ ತೂಕ ತಿಳಿಯಕೂಡದಷ್ಟಾಗಿತ್ತು.
4:19b.2CH.004.019 ಹೀಗೆಯೇ ಸೊಲೊಮೋನನು ಕರ್ತನ ಆಲಯದ ಎಲ್ಲಾ ಸಾಮಾನುಗಳನ್ನೂ ಬಂಗಾರದ ಧೂಪಪೀಠ ವನ್ನೂ ಸಮ್ಮುಖದ ರೊಟ್ಟಿಗಳನ್ನು ಇಡುವ ಮೇಜು ಗಳನ್ನೂ
4:20b.2CH.004.020 ಶುದ್ಧ ಬಂಗಾರವಾದ ದೈವೋಕ್ತಿಯ ಸ್ಥಾನದ ಮುಂದೆ ನ್ಯಾಯದ ಪ್ರಕಾರ ಹತ್ತಿರದ ದೀಪ ಸ್ತಂಭಗಳನ್ನೂ
4:21b.2CH.004.021 ಅವುಗಳ ದೀಪಗಳನ್ನೂ ಹೂವು ಗಳನ್ನೂ ದೀಪಗಳ ಚಿಮಟೆಗಳನ್ನೂ ಬಂಗಾರದಿಂದ ಅಂದರೆ ನಿರ್ಮಲವಾದ ಬಂಗಾರದಿಂದ ಮಾಡಿಸಿ ದನು; ಕತ್ತರಿಗಳನ್ನೂ ಬೋಗುಣಿಗಳನ್ನೂ ಸೌಟು ಗಳನ್ನೂ ಅಗ್ನಿಪಾತ್ರೆಗಳನ್ನೂ ಶುದ್ಧ ಬಂಗಾರದಿಂದ ಮಾಡಿಸಿದನು.ಇದಲ್ಲದೆ ಆಲಯ ಪ್ರವೇಶದ ಸ್ಥಳವೂ ಅತಿಪರಿಶುದ್ಧ ಸ್ಥಾನಕ್ಕೋಸ್ಕರವಾಗಿರುವ ಅದರ ಅಂತರಂಗದ ಬಾಗಲುಗಳೂ ಮಂದಿರದ ಮನೇ ಬಾಗಲುಗಳೂ ಬಂಗಾರದವುಗಳಾಗಿದ್ದವು.
4:22b.2CH.004.022 ಇದಲ್ಲದೆ ಆಲಯ ಪ್ರವೇಶದ ಸ್ಥಳವೂ ಅತಿಪರಿಶುದ್ಧ ಸ್ಥಾನಕ್ಕೋಸ್ಕರವಾಗಿರುವ ಅದರ ಅಂತರಂಗದ ಬಾಗಲುಗಳೂ ಮಂದಿರದ ಮನೇ ಬಾಗಲುಗಳೂ ಬಂಗಾರದವುಗಳಾಗಿದ್ದವು.
5
5:1b.2CH.005.001 ಹೀಗೆ ಸೊಲೊಮೋನನು ಕರ್ತನ ಆಲಯಕ್ಕೊಸ್ಕರ ಮಾಡಿಸಿದ ಕೆಲಸವೆಲ್ಲಾ ಮುಗಿಸಿ ತನ್ನ ತಂದೆಯಾದ ದಾವೀದನು ಪ್ರತಿಷ್ಠೆ ಮಾಡಿದ್ದ ಬೆಳ್ಳಿಬಂಗಾರವನ್ನೂ ಎಲ್ಲಾ ಸಾಮಾನು ಗಳನ್ನೂ ದೇವರ ಆಲಯದ ಬೊಕ್ಕಸಗಳಲ್ಲಿ ಇಟ್ಟನು.
5:2b.2CH.005.002 ಆಗ ಚೀಯೋನೆಂಬ ದಾವೀದನ ಪಟ್ಟಣದಿಂದ ಕರ್ತನ ಒಡಂಬಡಿಕೆಯ ಮಂಜೂಷವನ್ನು ತರುವ ನಿಮಿತ್ತ ಸೊಲೊಮೋನನು ಇಸ್ರಾಯೇಲಿನ ಮಕ್ಕಳ ಲ್ಲಿರುವ ಪ್ರಭುಗಳಾದ ತಂದೆಗಳಾಗಿರುವ ಇಸ್ರಾಯೇ ಲಿನ ಹಿರಿಯರನ್ನೂ ಗೋತ್ರಗಳ ಯಜಮಾನರನ್ನೂ ಯೆರೂಸಲೇಮಿಗೆ ಕೂಡಿ ಬರಮಾಡಿದನು.
5:3b.2CH.005.003 ಆದ ದರಿಂದ ಏಳನೇ ತಿಂಗಳಿನ ಹಬ್ಬದಲ್ಲಿ ಇಸ್ರಾಯೇಲಿನ ಮನುಷ್ಯರೆಲ್ಲರೂ ಅರಸನ ಬಳಿಗೆ ಬಂದು ಕೂಡಿದರು.
5:4b.2CH.005.004 ಇಸ್ರಾಯೇಲಿನ ಹಿರಿಯರೆಲ್ಲರು ಬಂದಾಗ ಲೇವಿ ಯರು ಮಂಜೂಷವನ್ನು ಎತ್ತಿಕೊಂಡರು.
5:5b.2CH.005.005 ಒಡಂಬಡಿ ಕೆಯ ಮಂಜೂಷವನ್ನೂ ಸಭೆಯ ಗುಡಾರವನ್ನೂ ಗುಡಾರದಲ್ಲಿದ್ದ ಸಮಸ್ತ ಪರಿಶುದ್ಧವಾದ ಪಾತ್ರೆಗಳನ್ನೂ ತಂದರು; ಇವುಗಳನ್ನು ಯಾಜಕರೂ ಲೇವಿಯರೂ ತಂದರು.
5:6b.2CH.005.006 ಆಗ ಅರಸನಾದ ಸೊಲೊಮೋನನೂ ತನ್ನ ಬಳಿಯಲ್ಲಿ ಮಂಜೂಷದ ಮುಂದೆ ಕೂಡಿಕೊಂಡ ಇಸ್ರಾಯೇಲ್ ಸಭೆಯವರೆಲ್ಲರೂ ಲೆಕ್ಕಿಸಲಾಗದ ಕುರಿ ಗಳನ್ನೂ ದನಗಳನ್ನೂ ಬಲಿಯಾಗಿ ಅರ್ಪಿಸಿದರು.
5:7b.2CH.005.007 ಇದಲ್ಲದೆ ಯಾಜಕರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಅತಿಪರಿಶುದ್ಧ ಸ್ಥಳಕ್ಕೆ ಆಲಯದ ದೈವೋಕ್ತಿ ಸ್ಥಾನಕ್ಕೆ ಕೆರೂಬಿಗಳ ರೆಕ್ಕೆಗಳ ಕೆಳಗಿದ್ದ ಅದರ ಸ್ಥಳಕ್ಕೆ ತಂದುಬಿಟ್ಟರು.
5:8b.2CH.005.008 ಕೆರೂಬಿಗಳು ಮಂಜೂ ಷದ ಸ್ಥಳದ ಮೇಲೆ ತಮ್ಮ ರೆಕ್ಕೆಗಳನ್ನು ಚಾಚಿಕೊಂಡಿ ದ್ದವು; ಹೀಗೆಯೇ ಕೆರೂಬಿಗಳು ಮಂಜೂಷವನ್ನೂ ಅದರ ಕೋಲುಗಳನ್ನೂ ಮೇಲಿನಿಂದ ಮುಚ್ಚಿಕೊಂಡಿ ದ್ದವು.
5:9b.2CH.005.009 ಆಗ ಕೋಲುಗಳ ಕೊನೆಗಳು ದೈವೋಕ್ತಿಯ ಮುಂದೆ ಮಂಜೂಷದಿಂದ ಕಾಣಲ್ಪಡುವ ಹಾಗೆ ಕೋಲುಗಳನ್ನು ಎಳಕೊಂಡರು. ಆದರೆ ಅವು ಹೊರಗೆ ಕಾಣಲ್ಪಡಲಿಲ್ಲ. ಅದು ಅಲ್ಲಿ ಇಂದಿನ ವರೆಗೂ ಇರು ತ್ತದೆ.
5:10b.2CH.005.010 ಇಸ್ರಾಯೇಲ್ ಮಕ್ಕಳು ಐಗುಪ್ತದೇಶದಿಂದ ಬಂದ ನಂತರ ಕರ್ತನು ಅವರ ಸಂಗಡ ಒಡಂಬಡಿಕೆ ಯನ್ನು ಮಾಡಿದಾಗ ಮೋಶೆಯು ಹೋರೇಬಿನ ಬಳಿ ಯಲ್ಲಿ ಮಂಜೂಷದೊಳಗೆ ಇಟ್ಟ ಕಲ್ಲಿನ ಎರಡು ಹಲಿಗೆಗಳ ಹೊರತು ಅದರಲ್ಲಿ ಮತ್ತೇನೂ ಇರಲಿಲ್ಲ.
5:11b.2CH.005.011 ಇದಲ್ಲದೆ ಅಲ್ಲಿ ಇದ್ದ ಸಮಸ್ತ ಯಾಜಕರು ಪರಿಶುದ್ಧ ವಾಗಿದ್ದು ಸರದಿಗಳ ಪ್ರಕಾರ ಕಾಯದೆ ಇದ್ದದರಿಂದ
5:12b.2CH.005.012 ಯಾಜಕರು ಪರಿಶುದ್ಧ ಸ್ಥಳದಿಂದ ಹೊರ ಟಾಗ ಸಂಗೀತಗಾರರಾಗಿರುವ ಲೇವಿಯರೂ ಆಸಾಫ್, ಹೇಮಾನ್, ಯೆದೂತೂನ್ ಇವರೆಲ್ಲರೂ ಅವರ ಮಕ್ಕಳೂ ಸಹೋದರರೂ ನಾರು ಮಡಿಯನ್ನು ಧರಿಸಿ ಕೊಂಡು ತಾಳ ವೀಣೆ ಕಿನ್ನರಿಗಳನ್ನು ಹಿಡಿದು ಬಲಿ ಪೀಠದ ಮೂಡಣ ಪಾರ್ಶ್ವದಲ್ಲಿ ನಿಂತುಕೊಂಡರು; ಅವರ ಸಂಗಡ ನೂರ ಇಪ್ಪತ್ತು ಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಇದ್ದರು.
5:13b.2CH.005.013 ತುತೂರಿ ಊದುವವರೂ ಸಂಗೀತಗಾರರೂ ಕರ್ತನನ್ನು ಕೊಂಡಾ ಡುತ್ತಾ ಹೊಗಳುತ್ತಾ ಏಕವಾಗಿ ಒಂದೇ ಶಬ್ದ ಮಾಡಿ ದಾಗ ತುತೂರಿ ತಾಳ ಮೊದಲಾದ ಗೀತ ವಾದ್ಯಗಳಿಂದ ತಮ್ಮ ಶಬ್ದವನ್ನೆತ್ತಿ--ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇರುವದೆಂದೂ ಕರ್ತನನ್ನು ಕೀರ್ತಿಸುವಾಗ ಕರ್ತನ ಆಲಯವು ಮೇಘದಿಂದ ತುಂಬಲ್ಪಟ್ಟಿತು.ಮೇಘದ ನಿಮಿತ್ತ ಯಾಜಕರು ಸೇವೆ ಗಾಗಿ ನಿಲ್ಲಲಾರದೆ ಇದ್ದರು; ಕರ್ತನ ಮಹಿಮೆಯು ದೇವರ ಆಲಯವನ್ನು ತುಂಬಿತ್ತು.
5:14b.2CH.005.014 ಮೇಘದ ನಿಮಿತ್ತ ಯಾಜಕರು ಸೇವೆ ಗಾಗಿ ನಿಲ್ಲಲಾರದೆ ಇದ್ದರು; ಕರ್ತನ ಮಹಿಮೆಯು ದೇವರ ಆಲಯವನ್ನು ತುಂಬಿತ್ತು.
6
6:1b.2CH.006.001 ಆಗ ಸೊಲೊಮೋನನು--ಕಾರ್ಗತ್ತಲಲ್ಲಿ ವಾಸವಾಗಿರುವೆನೆಂದು ಕರ್ತನು ಹೇಳಿದ್ದಾನೆ.
6:2b.2CH.006.002 ಆದರೆ ನಿನಗೆ ನಿವಾಸದ ಆಲಯವನ್ನೂ ನೀನು ಯುಗಯುಗಾಂತರಗಳಿಗೂ ವಾಸಮಾಡತಕ್ಕ ಸ್ಥಾನವನ್ನೂ ನಾನು ಕಟ್ಟಿಸಿದ್ದೇನೆ ಅಂದನು.
6:3b.2CH.006.003 ಅರಸನು ಇಸ್ರಾಯೇಲಿನ ಸಭೆಯವರ ಕಡೆಗೆ ತಿರುಗಿಕೊಂಡು ಆಶೀರ್ವದಿಸಿದಾಗ ಇಸ್ರಾಯೇಲಿನ ಸಭೆಯು ನಿಂತಿತ್ತು.
6:4b.2CH.006.004 ಅವನು--ನನ್ನ ತಂದೆಯಾದ ದಾವೀದನ ಸಂಗಡ ಮಾತನಾಡಿದ್ದನ್ನು ತನ್ನ ಕೈಯಿಂದ ನೆರವೇರಿಸಿದ ಇಸ್ರಾಯೇಲ್ಯರ ದೇವರಾದ ಕರ್ತನು ಸ್ತುತಿಸಲ್ಪಡಲಿ.
6:5b.2CH.006.005 ಆತನು ತನ್ನ ಬಾಯಿಂದ--ನನ್ನ ಜನ ರಾದ ಇಸ್ರಾಯೇಲನ್ನು ಐಗುಪ್ತದೇಶದಿಂದ ಬರ ಮಾಡಿದ ದಿನ ಮೊದಲುಗೊಂಡು ನನ್ನ ಹೆಸರು ಅದರಲ್ಲಿ ಇರುವ ಹಾಗೆ ಆಲಯವನ್ನು ಕಟ್ಟುವದಕ್ಕೆ ಇಸ್ರಾಯೇಲನ ಸಮಸ್ತ ಗೋತ್ರಗಳೊಳಗಿಂದ ಯಾವ ಪಟ್ಟಣವನ್ನೂ ಆದುಕೊಳ್ಳಲಿಲ್ಲ; ನನ್ನ ಜನರಾದ ಇಸ್ರಾ ಯೇಲಿನ ಮೇಲೆ ಆಳುವವನಾಗಿರಲು ನಾನು ಒಬ್ಬನ ನ್ನಾದರೂ ಆದುಕೊಳ್ಳಲಿಲ್ಲ.
6:6b.2CH.006.006 ಆದರೆ ನನ್ನ ಹೆಸರು ಅಲ್ಲಿ ಇರುವ ಹಾಗೆ ಯೆರೂಸಲೇಮನ್ನೂ ನನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ಇರಲು ದಾವೀದನನ್ನೂ ಆದುಕೊಂಡಿದ್ದೇನೆ ಎಂದು ಹೇಳಿದ್ದಾನೆ.
6:7b.2CH.006.007 ಆದಕಾರಣ ಇಸ್ರಾಯೇಲಿನ ದೇವರಾದ ಕರ್ತನ ಹೆಸರಿಗೆ ಆಲಯ ವನ್ನು ಕಟ್ಟಿಸಲು ನನ್ನ ತಂದೆಯಾದ ದಾವೀದನಿಗೆ ಮನಸ್ಸಿತ್ತು.
6:8b.2CH.006.008 ಆಗ ಕರ್ತನು ನನ್ನ ತಂದೆಯಾದ ದಾವೀ ದನಿಗೆ--ನನ್ನ ಹೆಸರಿಗೆ ಆಲಯವನ್ನು ಕಟ್ಟಿಸಲು ನಿನಗೆ ಮನಸ್ಸಾಗಿತ್ತಲ್ಲಾ? ನಿನಗೆ ಮನಸ್ಸಾಗಿರುವದರಿಂದ ಒಳ್ಳೇದು ಮಾಡಿದಿ.
6:9b.2CH.006.009 ಆದರೆ ನೀನು ಆಲಯವನ್ನು ಕಟ್ಟಿಸಬೇಡ; ನಿನ್ನಿಂದ ಹುಟ್ಟುವ ಮಗನೇ ನನ್ನ ಹೆಸರಿ ಗೋಸ್ಕರ ಆಲಯವನ್ನು ಕಟ್ಟಿಸುವನು ಅಂದನು.
6:10b.2CH.006.010 ಈಗ ಕರ್ತನು ತಾನು ಹೇಳಿದ ವಾಕ್ಯವನ್ನು ನೆರ ವೇರಿಸಿದ್ದಾನೆ. ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಎದ್ದು ಕರ್ತನು ಮಾತು ಕೊಟ್ಟ ಪ್ರಕಾರ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಂಡು ಇಸ್ರಾಯೇಲಿನ ದೇವರಾದ ಕರ್ತನ ಹೆಸರಿಗೆ ಆಲಯ ವನ್ನು ಕಟ್ಟಿಸಿ
6:11b.2CH.006.011 ಕರ್ತನು ಇಸ್ರಾಯೇಲ್ ಮಕ್ಕಳ ಸಂಗಡ ಮಾಡಿದ ಕರ್ತನ ಒಡಂಬಡಿಕೆಯು ಇರುವ ಮಂಜೂಷವನ್ನು ಅದರಲ್ಲಿ ಇರಿಸಿದ್ದೇನೆ.
6:12b.2CH.006.012 ಆಗ ಇಸ್ರಾಯೇಲಿನ ಸಭೆಯ ಸಮ್ಮುಖದಲ್ಲಿ ದೇವರ ಬಲಿಪೀಠದ ಮುಂದೆ ಅವನು ನಿಂತು ತನ್ನ ಕೈಗಳನ್ನು ಚಾಚಿದನು.
6:13b.2CH.006.013 ಸೊಲೊಮೋನನು ಐದು ಮೊಳ ಉದ್ದವೂ ಐದು ಮೊಳ ಅಗಲವೂ ಮೂರು ಮೊಳ ಎತ್ತರವೂ ಆಗಿರುವ ಒಂದು ತಾಮ್ರದ ಪೀಠವನ್ನು ಮಾಡಿಸಿ ಅಂಗಳದ ಮಧ್ಯದಲ್ಲಿ ಅದನ್ನು ಇರಿಸಿ ತಾನು ಅದರ ಮೇಲೆ ನಿಂತು ಇಸ್ರಾಯೇಲಿನ ಸಮಸ್ತ ಸಭೆಯ ಮುಂದೆ ಮೊಣಕಾಲೂರಿ ಆಕಾಶಕ್ಕೆ ತನ್ನ ಕೈಗಳನ್ನು ಚಾಚಿ--
6:14b.2CH.006.014 ಇಸ್ರಾಯೇಲಿನ ದೇವರಾದ ಓ ಕರ್ತನೇ, ಆಕಾಶದಲ್ಲಾದರೂ ಭೂಮಿಯಲ್ಲಾ ದರೂ ನಿನ್ನ ಹಾಗೆ ದೇವರು ಯಾರೂ ಇಲ್ಲ. ತಮ್ಮ ಸಂಪೂರ್ಣ ಹೃದಯದಿಂದ ನಡೆಯುವ ನಿನ್ನ ಸೇವಕರಿ ಗೋಸ್ಕರ ಒಡಂಬಡಿಕೆಯನ್ನು ಕೈಕೊಂಡು ಕೃಪೆಯನ್ನು ತೋರಿಸುತ್ತಿ.
6:15b.2CH.006.015 ನೀನು ನಿನ್ನ ಸೇವಕನಾದಂಥ ನನ್ನ ತಂದೆಯಾದ ದಾವೀದನಿಗೋಸ್ಕರ ಕೊಟ್ಟ ಮಾತನ್ನು ನೆರವೇರಿಸಿ ನಿನ್ನ ಬಾಯಿಂದ ಹೇಳಿದ್ದನ್ನು ಇಂದು ನಿನ್ನ ಕೈಯಿಂದ ಮಾಡಿ ತೀರಿಸಿದಿ.
6:16b.2CH.006.016 ಆದಕಾರಣ ಇಸ್ರಾಯೇಲಿನ ದೇವರಾದ ಓ ಕರ್ತನೇ,--ನಿನ್ನ ಮಕ್ಕಳು ತಮ್ಮ ಮಾರ್ಗಕ್ಕೆ ಜಾಗ್ರತೆಯಾಗಿದ್ದು ನೀನು ನನ್ನ ಮುಂದೆ ನಡೆದ ಹಾಗೆ ಅವರು ನನ್ನ ನ್ಯಾಯ ಪ್ರಮಾಣದ ಪ್ರಕಾರ ನಡೆದರೆ ಇಸ್ರಾಯೇಲಿನ ಸಿಂಹಾಸನದ ಮೇಲೆ ನನ್ನ ಸಮ್ಮುಖದಲ್ಲಿ ಕುಳಿತುಕೊ ಳ್ಳಲು ನಿನಗೆ ಮನುಷ್ಯನು ಕೊರತೆಯಾಗುವದಿಲ್ಲವೆಂದು ನೀನು ನನ್ನ ತಂದೆಯೂ ನಿನ್ನ ಸೇವಕನೂ ದಾವೀದನಿಗೆ ಹೇಳಿದ್ದನ್ನು ನಡಿಸು.
6:17b.2CH.006.017 ಈಗ ಇಸ್ರಾಯೇಲಿನ ದೇವ ರಾದ ಓ ಕರ್ತನೇ, ನಿನ್ನ ಸೇವಕನಾದ ದಾವೀದನಿಗೆ ಹೇಳಿದ ವಾಕ್ಯವು ನಿಶ್ಚಯವಾಗಲಿ.
6:18b.2CH.006.018 ಆದರೆ ದೇವರು ನಿಶ್ಚಯವಾಗಿ ಭೂಮಿಯ ಮೇಲೆ ಮನುಷ್ಯರ ಸಂಗಡ ವಾಸವಾಗಿರುವನೋ? ಇಗೋ, ಆಕಾಶಗಳೂ ಆಕಾಶಾಕಾಶಗಳೂ ನಿನ್ನನ್ನು ಹಿಡಿಸಲಾರವು; ಹಾಗಾದರೆ ನಾನು ಕಟ್ಟಿಸಿದ ಈ ಆಲಯವು ನಿನ್ನನ್ನು ಹಿಡಿಸುವದು ಹೇಗೆ?
6:19b.2CH.006.019 ನನ್ನ ದೇವರಾದ ಓ ಕರ್ತನೇ, ನಿನ್ನ ಸೇವಕನು ನಿನ್ನ ಮುಂದೆ ಪ್ರಾರ್ಥಿಸಿದ ಪ್ರಾರ್ಥನೆಯನ್ನೂ ಮೊರೆಯನ್ನೂ ಕೇಳುವ ಹಾಗೆ ನಿನ್ನ ಸೇವಕನ ಪ್ರಾರ್ಥನೆಯನ್ನೂ ಅವನ ವಿಜ್ಞಾಪನೆಯನ್ನೂ ಕಟಾಕ್ಷಿಸು.
6:20b.2CH.006.020 ನಿನ್ನ ಸೇವಕನು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಯನ್ನು ನೀನು ಕೇಳುವ ಹಾಗೆ ಅಲ್ಲಿ ನನ್ನ ಹೆಸರು ಇರುವದೆಂದು ನೀನು ಹೇಳಿದ ಈ ಸ್ಥಳದ ಮೇಲೆಯೂ ಈ ಆಲಯದ ಮೇಲೆಯೂ ಹಗಲಿರುಳು ನಿನ್ನ ಕಣ್ಣುಗಳು ತೆರೆದಿರಲಿ.
6:21b.2CH.006.021 ಇದಲ್ಲದೆ ನೀನು ನಿನ್ನ ಸೇವಕನ ವಿಜ್ಞಾಪನೆಯನ್ನೂ ನಿನ್ನ ಜನರಾದ ಇಸ್ರಾಯೇಲ್ಯರ ವಿಜ್ಞಾಪನೆಯನ್ನೂ ಕೇಳು. ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸುವಾಗ ನೀನು ವಾಸಮಾಡುವ ಸ್ಥಳವಾದ ಆಕಾಶದಿಂದ ಕೇಳು, ಕೇಳಿ ಮನ್ನಿಸು.
6:22b.2CH.006.022 ಯಾವನಾದರೂ ತನ್ನ ನೆರೆಯವ ನಿಗೆ ವಿರೋಧವಾಗಿ ಪಾಪಮಾಡಿ ಅವನು ಆಣೆಇಡಬೇಕೆಂದು ನೇಮಿಸಲು
6:23b.2CH.006.023 ಈ ಆಲಯದಲ್ಲಿ ನಿನ್ನ ಬಲಿಪೀಠದ ಮುಂದೆ ಈ ಆಣೆ ಬಂದರೆ ನೀನೇ ದುಷ್ಟನ ಮಾರ್ಗವನ್ನು ಅವನ ತಲೆಯ ಮೇಲೆ ಬರ ಮಾಡಿ ಅವನಿಗೆ ಬದಲು ಕೊಡುವ ಹಾಗೆಯೂ ನೀತಿವಂತನನ್ನು ನೀತಿವಂತನಾಗಿ ಮಾಡಿ ಅವನ ನೀತಿಯ ಪ್ರಕಾರ ಅವನಿಗೆ ಕೊಡುವ ಹಾಗೆಯೂ ನೀನು ಆಕಾಶದಿಂದ ಕೇಳಿ ನಡಿಸಿ ನಿನ್ನ ಸೇವಕರ ನ್ಯಾಯವನ್ನು ತೀರಿಸು.
6:24b.2CH.006.024 ನಿನ್ನ ಜನರಾದ ಇಸ್ರಾಯೇಲ್ಯರು ನಿನಗೆ ವಿರೋ ಧವಾಗಿ ಪಾಪಮಾಡಿದ್ದರಿಂದ ತಮ್ಮ ಶತ್ರುವಿನ ಮುಂದೆ ಸೋತು ಹೋದಾಗ ಅವರು ತಿರುಗಿ ಈ ಆಲಯದಲ್ಲಿ ನಿನ್ನ ಮುಂದೆ ನಿನ್ನ ಹೆಸರನ್ನು ಕೊಂಡಾಡಿ
6:25b.2CH.006.025 ಪ್ರಾರ್ಥಿಸಿ ವಿಜ್ಞಾಪನೆ ಮಾಡಿದರೆ ನೀನು ಆಕಾಶದಿಂದ ಕೇಳಿ ನಿನ್ನ ಜನರಾದ ಇಸ್ರಾಯೇಲಿನ ಪಾಪವನ್ನು ಮನ್ನಿಸಿ ನೀನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶಕ್ಕೆ ಅವರನ್ನು ತಿರಿಗಿ ಬರಮಾಡು.
6:26b.2CH.006.026 ಅವರು ನಿನಗೆ ವಿರೋಧವಾಗಿ ಪಾಪಮಾಡಿ ದ್ದರಿಂದ ಆಕಾಶವು ಮುಚ್ಟಲ್ಪಟ್ಟು ಮಳೆ ಇಲ್ಲದಿರು ವಾಗ ನೀನು ಅವರನ್ನು ಶಿಕ್ಷಿಸಿದ್ದರಿಂದ ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸಿ ನಿನ್ನ ಹೆಸರನ್ನು ಕೊಂಡಾಡಿ ತಮ್ಮ ಪಾಪವನ್ನು ಬಿಟ್ಟು ತಿರುಗಿಕೊಂಡರೆ
6:27b.2CH.006.027 ನೀನು ಆಕಾಶದಿಂದ ಕೇಳಿ ನಿನ್ನ ಸೇವಕರಾದ ಇಸ್ರಾಯೇಲ್ ಜನರ ಪಾಪವನ್ನು ಮನ್ನಿಸಿ ಅವರು ನಡೆಯಬೇಕಾದ ಒಳ್ಳೇ ಮಾರ್ಗವನ್ನು ಕಲಿಸಿ ಬಾಧ್ಯೆತೆಯಾಗಿ ನಿನ್ನ ಜನರಿಗೆ ಕೊಟ್ಟ ಭೂಮಿಯ ಮೇಲೆ ಮಳೆಯನ್ನು ಕೊಡು.
6:28b.2CH.006.028 ದೇಶದಲ್ಲಿ ಬರವು, ಜಾಡ್ಯವು, ಉರಿಗಾಳಿಯು, ಬೂದಿಯು, ಮಿಡಿತೆ, ಕಂಬಳಿಹುಳ ಇವುಗಳು ಇದ್ದರೆ ಇಲ್ಲವೆ ಅವರ ಶತ್ರುಗಳು ತಮ್ಮ ಸ್ವದೇಶದ ಪಟ್ಟಣ ಗಳಲ್ಲಿ ಅವರನ್ನು ಸಂಕಟಪಡಿಸಿದರೆ ಯಾವ ಬಾಧೆ ಯಾವ ಬೇನೆ ಇದ್ದರೂ ತನ್ನ ಬಾಧೆಯನ್ನೂ ವ್ಯಸನ ವನ್ನೂ ತಿಳಿಯುವ ಒಬ್ಬ ಮನುಷ್ಯನಾದರೂ
6:29b.2CH.006.029 ನಿನ್ನ ಜನವಾದ ಸಮಸ್ತ ಇಸ್ರಾಯೇಲಾದರೂ ಪ್ರಾರ್ಥನೆ ಯನ್ನೂ ವಿಜ್ಞಾಪನೆಯನ್ನೂ ಮಾಡಲು ಅವರು ತಮ್ಮ ಕೈಗಳನ್ನು ಈ ಆಲಯದ ಕಡೆಗೆ ಚಾಚಿದರೆ
6:30b.2CH.006.030 ನೀನು ನಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ಅವರು ಬದು ಕುವ ವರೆಗೆ ಅವರು ನಿನಗೆ ಭಯಪಟ್ಟು ನಿನ್ನ ಮಾರ್ಗ ದಲ್ಲಿ ನಡೆಯುವ ಹಾಗೆ
6:31b.2CH.006.031 ನೀನು ಅಕಾಶದಿಂದ ಅಂದರೆ ನೀನು ವಾಸಮಾಡುವ ಸ್ಥಳದಿಂದ ಕೇಳಿ ಮನ್ನಿಸಿ ಮನುಷ್ಯನ ಹೃದಯವನ್ನು ತಿಳಿಯುವ ನೀನು ಪ್ರತಿ ಮನುಷ್ಯನಿಗೂ ಅವನವನ ಮಾರ್ಗದ ಪ್ರಕಾರಕೊಡು; ಯಾಕಂದರೆ ನೀನೊಬ್ಬನೇ ಸಮಸ್ತ ಮನುಷ್ಯ ಮಕ್ಕಳ ಹೃದಯಗಳನ್ನು ತಿಳಿದವನಾಗಿದ್ದೀ.
6:32b.2CH.006.032 ನಿನ್ನ ದೊಡ್ಡ ಹೆಸರು, ನಿನ್ನ ಬಲವಾದ ಕೈ, ಚಾಚಿದ ನಿನ್ನ ತೋಳು ಇವುಗಳ ನಿಮಿತ್ತ ನಿನ್ನ ಜನ ವಾದ ಇಸ್ರಾಯೇಲಿನವನಲ್ಲದೆ ದೂರದೇಶದಿಂದ ಬಂದ ಪರದೇಶಸ್ಥರನ್ನು ಕುರಿತು ಏನಂದರೆ,
6:33b.2CH.006.033 ಅವರು ಬಂದು ಈ ಆಲಯದಲ್ಲಿ ಪ್ರಾರ್ಥನೆ ಮಾಡಿದರೆ ನಿನ್ನ ಜನರಾದ ಇಸ್ರಾಯೇಲಿನ ಪ್ರಕಾರ ಭೂಲೋಕ ದಲ್ಲಿರುವ ಸಮಸ್ತರೂ ನಿನಗೆ ಭಯಪಟ್ಟು ನಿನ್ನ ಹೆಸ ರನ್ನು ತಿಳಿಯುವ ಹಾಗೆಯೂ ನಾನು ಕಟ್ಟಿಸಿದ ಈ ಆಲಯವು ನಿನ್ನ ಹೆಸರಿನಿಂದ ಕರೆಯಲ್ಪಟ್ಟಿತೆಂದು ಅವರು ತಿಳಿಯುವ ಹಾಗೆಯೂ ನೀನು ವಾಸಮಾಡುವ ಸ್ಥಳವಾದ ಆಕಾಶದಿಂದ ಕೇಳಿ ಪರದೇಶಸ್ಥನು ನಿನಗೆ ಬೇಡಿದ ಎಲ್ಲಾದರ ಹಾಗೆ ಅನುಗ್ರಹಿಸು.
6:34b.2CH.006.034 ನಿನ್ನ ಜನರು ನೀನು ಅಟ್ಟಿಬಿಡುವ ಯಾವ ಸ್ಥಳ ದಲ್ಲಾದರೂ ತಮ್ಮ ಶತ್ರುಗಳ ಸಂಗಡ ಯುದ್ಧ ಮಾಡಲು ಹೊರಟು ಹೋಗಿ ನೀನು ಆದುಕೊಂಡ ಪಟ್ಟಣದ ಮಾರ್ಗವಾಗಿಯೂ ನಾನು ನಿನ್ನ ಹೆಸರಿಗೆ ಕಟ್ಟಿಸಿದ ಈ ಆಲಯದ ಮಾರ್ಗವಾಗಿಯೂ ಅವರು ನಿನಗೆ ಪ್ರಾರ್ಥನೆ ಮಾಡಿದರೆ
6:35b.2CH.006.035 ನೀನು ಆಕಾಶದಿಂದ ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ ಅವರ ನ್ಯಾಯವನ್ನು ತೀರಿಸು.
6:36b.2CH.006.036 ಪಾಪಮಾಡದವನು ಯಾವನೂ ಇಲ್ಲದ್ದರಿಂದ ಅವರು ನಿನಗೆ ವಿರೋಧವಾಗಿ ಪಾಪಮಾಡಲು ನೀನು ಅವರ ಮೇಲೆ ಕೋಪಿಸಿಕೊಂಡು ದೂರವಾದರೂ ಸವಿಾಪವಾದರೂ ಶತ್ರುವಿನ ದೇಶಕ್ಕೆ ಅವರು ಸೆರೆ ಯಾಗಿ ಒಯ್ಯಲ್ಪಡುವ ಹಾಗೆ
6:37b.2CH.006.037 ನೀನು ಅವರನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿರಲಾಗಿ ಅವರು ಸೆರೆಯಾಗಿ ಒಯ್ಯಲ್ಪಟ್ಟ ದೇಶದಲ್ಲಿ ಮನಸ್ಸು ತಿರಿಗಿಸಿ ಪಶ್ಚಾತ್ತಾಪ ಪಟ್ಟು--ನಾವು ಪಾಪಮಾಡಿದ್ದೇವೆ, ಅಕೃತ್ಯಮಾಡಿ ದುಷ್ಟರಾಗಿ ನಡೆದಿದ್ದೇವೆ ಎಂದು ತಮ್ಮನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿನಗೆ ಪ್ರಾರ್ಥನೆ ಮಾಡಿ
6:38b.2CH.006.038 ಅವರನ್ನು ಸೆರೆಯಾಗಿ ಒಯ್ದದೇಶದಲ್ಲಿ ತಮ್ಮ ಪೂರ್ಣಹೃದಯದಿಂದಲೂ ತಮ್ಮ ಪೂರ್ಣಪ್ರಾಣ ದಿಂದಲೂ ನಿನ್ನ ಕಡೆಗೆ ತಿರುಗಿಕೊಂಡು ನೀನು ಅವರ ಪಿತೃಗಳಿಗೆ ಕೊಟ್ಟ ತಮ್ಮ ದೇಶದ ಮಾರ್ಗವಾಗಿಯೂ ನೀನು ಆದುಕೊಂಡ ಪಟ್ಟಣದ ಮಾರ್ಗವಾಗಿಯೂ ನಿನ್ನ ಹೆಸರಿಗೋಸ್ಕರ ನಾನು ಕಟ್ಟಿಸಿದ ಈ ಆಲಯದ ಮಾರ್ಗವಾಗಿಯೂ ಅವರು ಪ್ರಾರ್ಥನೆ ಮಾಡಿದರೆ
6:39b.2CH.006.039 ನೀನು ಆಕಾಶದಲ್ಲಿ ವಾಸಮಾಡುವ ಸ್ಥಳದಿಂದ ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ ಅವರ ನ್ಯಾಯವನ್ನು ತೀರಿಸಿ ನಿನ್ನ ಜನರು ನಿನಗೆ ವಿರೋಧವಾಗಿ ಮಾಡಿದ ಪಾಪಗಳನ್ನು ಮನ್ನಿಸು.
6:40b.2CH.006.040 ಈಗ ನನ್ನ ದೇವರೇ, ಈ ಸ್ಥಳದಲ್ಲಿ ಮಾಡಿದ ಪ್ರಾರ್ಥನೆಗೆ ನಿನ್ನ ಕಣ್ಣುಗಳು ತೆರೆದಿರಲಿ, ನಿನ್ನ ಕಿವಿಗಳು ಆಲೈಸುತ್ತಾ ಇರಲಿ.
6:41b.2CH.006.041 ಈಗ ಓ ದೇವರಾದ ಕರ್ತನೇ, ನೀನು ನಿನ್ನ ಬಲದ ಮಂಜೂಷದ ಸಂಗಡ ನಿನ್ನ ವಿಶ್ರಾಂತಿಗೆ ಏರು; ಓ ದೇವರಾದ ಕರ್ತನೇ, ನಿನ್ನ ಯಾಜಕರು ರಕ್ಷಣೆಯನ್ನು ಧರಿಸಿಕೊಳ್ಳಲಿ; ನಿನ್ನ ಪರಿ ಶುದ್ಧರು ಒಳ್ಳೇದರಲ್ಲಿ ಸಂತೋಷಪಡಲಿ.ಓ ದೇವರಾದ ಕರ್ತನೇ, ನಿನ್ನ ಅಭಿಷಿಕ್ತನಿಗೆ ನಿನ್ನ ಮುಖ ವನ್ನು ತಿರುಗಿಸಬೇಡ; ನಿನ್ನ ಸೇವಕನಾದ ದಾವೀದ ನಿಗೆ ಅನುಗ್ರಹಿಸಿದ ಕೃಪೆಗಳನ್ನು ಜ್ಞಾಪಕಮಾಡು ಎಂದು ಬೇಡಿಕೊಂಡನು.
6:42b.2CH.006.042 ಓ ದೇವರಾದ ಕರ್ತನೇ, ನಿನ್ನ ಅಭಿಷಿಕ್ತನಿಗೆ ನಿನ್ನ ಮುಖ ವನ್ನು ತಿರುಗಿಸಬೇಡ; ನಿನ್ನ ಸೇವಕನಾದ ದಾವೀದ ನಿಗೆ ಅನುಗ್ರಹಿಸಿದ ಕೃಪೆಗಳನ್ನು ಜ್ಞಾಪಕಮಾಡು ಎಂದು ಬೇಡಿಕೊಂಡನು.
7
7:1b.2CH.007.001 ಸೊಲೊಮೋನನು ಪ್ರಾರ್ಥಿಸಿ ತೀರಿಸಿದಾಗ ಬೆಂಕಿಯು ಆಕಾಶದಿಂದ ಇಳಿದು ದಹನ ಬಲಿಗಳನ್ನೆಲ್ಲಾ ದಹಿಸಿಬಿಟ್ಟಿತು.
7:2b.2CH.007.002 ಮಹಿಮೆಯು ಆಲಯವನ್ನು ತುಂಬಿತು. ಕರ್ತನ ಮಹಿಮೆಯು ಕರ್ತನ ಆಲಯವನ್ನು ತುಂಬಿದ್ದರಿಂದ ಯಾಜಕರು ಕರ್ತನ ಮನೆಯಲ್ಲಿ ಹೋಗಲಾರದೆ ಇದ್ದರು.
7:3b.2CH.007.003 ಇಸ್ರಾಯೇ ಲಿನ ಮಕ್ಕಳೆಲ್ಲರೂ ಬೆಂಕಿಯು ಇಳಿದದ್ದನ್ನು ಮನೆಯ ಮೇಲೆ ಇರುವ ಕರ್ತನ ಮಹಿಮೆಯನ್ನು ಕಂಡಾಗ ನೆಲಕ್ಕೆ ತಮ್ಮ ಮುಖಗಳನ್ನು ಬಾಗಿಸಿ ಆರಾಧಿಸಿ ಕರ್ತ ನನ್ನು ಕೊಂಡಾಡಿ--ಆತನು ಒಳ್ಳೆಯವನು, ಆತನ ಕೃಪೆಯು ಯುಗಯುಗಕ್ಕೂ ಇರುವದು ಎಂದು ಹೇಳಿ ದರು.
7:4b.2CH.007.004 ಆಗ ಅರಸನೂ ಸಮಸ್ತ ಜನರೂ ಕರ್ತ ನಿಗೆ ಬಲಿಗಳನ್ನು ಅರ್ಪಿಸಿದರು.
7:5b.2CH.007.005 ಅರಸನಾದ ಸೊಲೊ ಮೋನನು ಇಪ್ಪತ್ತೆರಡು ಸಾವಿರ ಎತ್ತುಗಳನ್ನೂ ಲಕ್ಷದ ಇಪ್ಪತ್ತುಸಾವಿರ ಕುರಿಗಳನ್ನೂ ಬಲಿಯಾಗಿ ಅರ್ಪಿಸಿ ದನು. ಹೀಗೆಯೇ ಅರಸನೂ ಸಮಸ್ತ ಜನರೂ ದೇವರ ಆಲಯವನ್ನು ಪ್ರತಿಷ್ಠೆಮಾಡಿದರು.
7:6b.2CH.007.006 ಯಾಜಕರು ತಮ್ಮ ತಮ್ಮ ಸೇವೆಯಲ್ಲಿ ನಿಲ್ಲುತ್ತಿದ್ದರು; ಹಾಗೆಯೇ ದಾವೀ ದನು ತಮ್ಮ ಸೇವೆಗಾಗಿ ಹೊಗಳುತ್ತಾ ಕರ್ತನ ಕೃಪೆಯು ಯುಗಯುಗಕ್ಕೂ ಇರುವದೆಂದು ಅರಸನಾದ ದಾವೀ ದನು ಆತನನ್ನು ಕೊಂಡಾಡುವದಕ್ಕೆ ಮಾಡಿಸಿದ ಕರ್ತನ ಗೀತವಾದ್ಯಗಳನ್ನು ಲೇವಿಯರು ಹಿಡುಕೊಂಡಿದ್ದರು. ಯಾಜಕರು ಅವರ ಮುಂದೆ ತುತೂರಿಗಳನ್ನು ಊದಿ ದರು; ಸಮಸ್ತ ಇಸ್ರಾಯೇಲ್ಯರು ನಿಂತಿದ್ದರು.
7:7b.2CH.007.007 ಇದ ಲ್ಲದೆ ಸೊಲೊಮೋನನು ಕರ್ತನ ಆಲಯದ ಮುಂದಿ ರುವ ಮಧ್ಯ ಅಂಗಳವನ್ನು ಪರಿಶುದ್ಧಮಾಡಿದನು; ಯಾಕಂದರೆ ಸೊಲೊಮೋನನು ಮಾಡಿಸಿದ ತಾಮ್ರದ ಪೀಠದ ಮೇಲೆ ದಹನಬಲಿಗಳನ್ನೂ ಕಾಣಿಕೆಗಳನ್ನೂ ಕೊಬ್ಬನ್ನೂ ಇಡುವದಕ್ಕೆ ಸ್ಥಳ ಸಾಲದೆ ಇದ್ದದ್ದರಿಂದ ಅಲ್ಲಿ ಅವನು ದಹನಬಲಿಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಅರ್ಪಿಸಿದನು.
7:8b.2CH.007.008 ಅದೇ ಕಾಲ ದಲ್ಲಿ ಸೊಲೊಮೋನನು ಅವನ ಸಂಗಡ ಹಮಾತಿನ ಪ್ರದೇಶ ಮೊದಲುಗೊಂಡು ಐಗುಪ್ತ ನದಿಯ ವರೆಗೆ ಇರುವ ಮಹಾ ಸಭೆಯಾದ ಸಮಸ್ತ ಇಸ್ರಾಯೇಲ್ಯರು ಏಳು ದಿವಸ ಹಬ್ಬವನ್ನು ಮಾಡಿದರು.
7:9b.2CH.007.009 ಎಂಟನೇ ದಿವಸದಲ್ಲಿ ಪರಿಶುದ್ಧ ಸಂಘವನ್ನು ಮಾಡಿಕೊಂಡರು; ಬಲಿಪೀಠದ ಪ್ರತಿಷ್ಠೆಯನ್ನೂ ಹಬ್ಬವನ್ನೂ ಏಳು ದಿವಸ ಕೈಕೊಂಡರು;
7:10b.2CH.007.010 ಏಳನೇ ತಿಂಗಳಿನ ಇಪ್ಪತ್ತ ಮೂರನೇ ದಿವಸದಲ್ಲಿ ಅವನು ಜನರನ್ನು ತಮ್ಮ ಡೇರೆ ಗಳಿಗೆ ಕಳುಹಿಸಿಬಿಟ್ಟನು. ಕರ್ತನು ದಾವೀದನಿಗೂ ಸೊಲೊಮೋನನಿಗೂ ತನ್ನ ಜನವಾದ ಇಸ್ರಾಯೇ ಲಿಗೂ ಮಾಡಿದ ಉಪಕಾರಕ್ಕೋಸ್ಕರ ಅವರು ಹೃದಯ ದಲ್ಲಿ ಆನಂದವಾಗಿ ಸಂತೋಷಪಡುತ್ತಾ ಹೋದರು.
7:11b.2CH.007.011 ಹೀಗೆಯೇ ಸೊಲೊಮೋನನು ಕರ್ತನ ಆಲಯ ವನ್ನೂ ಅರಸನ ಮನೆಯನ್ನೂ ಕಟ್ಟಿಸಿ ಮುಗಿಸಿದನು. ಕರ್ತನ ಆಲಯದಲ್ಲಿಯೂ ತನ್ನ ಮನೆಯಲ್ಲಿಯೂ ಮಾಡಲು ಸೊಲೊಮೋನನ ಹೃದಯದಲ್ಲಿ ಬಂದ ದ್ದನ್ನೆಲ್ಲಾ ಅವನು ಸಫಲವಾಗುವಂತೆ ಸಾಧಿಸಿದನು.
7:12b.2CH.007.012 ಕರ್ತನು ರಾತ್ರಿಯಲ್ಲಿ ಸೊಲೊಮೋನನಿಗೆ ಕಾಣಿಸಿ ಕೊಂಡು ಅವನಿಗೆ--ನಾನು ನಿನ್ನ ಪ್ರಾರ್ಥನೆಯನ್ನು ಕೇಳಿ ಬಲಿಯರ್ಪಿಸುವ ಆಲಯವಾಗಿ ನನಗೆ ಈ ಸ್ಥಳವನ್ನು ಆದುಕೊಂಡಿದ್ದೇನೆ.
7:13b.2CH.007.013 ಮಳೆ ಇಲ್ಲದ ಹಾಗೆ ನಾನು ಆಕಾಶವನ್ನು ಮುಚ್ಚಿದರೂ ದೇಶವನ್ನು ತಿಂದು ಬಿಡಲು ಮಿಡಿತೆಗಳಿಗೆ ಆಜ್ಞಾಪಿಸಿದರೂ
7:14b.2CH.007.014 ಇಲ್ಲವೆ ನನ್ನ ಜನರ ಮಧ್ಯದಲ್ಲಿ ಜಾಡ್ಯವನ್ನು ಕಳುಹಿಸಿದರೂ ನನ್ನ ಹೆಸರಿನಿಂದ ಕರೆಯಲ್ಪಟ್ಟ ನನ್ನ ಜನರು ತಮ್ಮನ್ನು ತಗ್ಗಿಸಿಕೊಂಡು ಪ್ರಾರ್ಥನೆ ಮಾಡಿ ನನ್ನ ಮುಖವನ್ನು ಹುಡುಕಿ ತಮ್ಮ ದುರ್ಮಾರ್ಗಗಳಿಂದ ತಿರುಗಿದರೆ ನಾನು ಆಕಾಶದಿಂದ ಕೇಳಿ ಅವರ ಪಾಪವನ್ನು ಮನ್ನಿಸಿ ಅವರ ದೇಶವನ್ನು ಗುಣಮಾಡುವೆನು.
7:15b.2CH.007.015 ಈಗ ಈ ಸ್ಥಳದ ಪ್ರಾರ್ಥನೆಗೆ ನನ್ನ ಕಣ್ಣುಗಳು ತೆರೆದಿರುವವು, ನನ್ನ ಕಿವಿಗಳು ಆಲೈಸುತ್ತಿರುವವು.
7:16b.2CH.007.016 ನನ್ನ ಹೆಸರು ಯುಗಯುಗಾಂತರಕ್ಕೂ ಅಲ್ಲಿ ಇರುವ ಹಾಗೆ ಈ ಮನೆಯನ್ನು ಆದುಕೊಂಡು ಪರಿಶುದ್ಧ ಮಾಡಿದ್ದೇನೆ; ನನ್ನ ಕಣ್ಣುಗಳೂ ನನ್ನ ಹೃದಯವೂ ಅಲ್ಲಿ ಯಾವಾಗಲೂ ಇರುವವು.
7:17b.2CH.007.017 ನೀನಾದರೋ ನಿನ್ನ ತಂದೆಯಾದ ದಾವೀ ದನು ನಡೆದ ಹಾಗೆ ನೀನೂ ನನ್ನ ಮುಂದೆ ನಡೆದು ನಾನು ನಿನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾಡಿ ನನ್ನ ನಿಯಮಗಳನ್ನೂ ನ್ಯಾಯಗಳನ್ನೂ ಕೈಕೊಂಡರೆ
7:18b.2CH.007.018 ಇಸ್ರಾಯೇಲನ್ನು ಆಳುವ ಮನುಷ್ಯನು ನಿನಗೆ ಕೊರತೆ ಯಾಗುವದಿಲ್ಲವೆಂದು ನಿನ್ನ ತಂದೆಯಾದ ದಾವೀದನ ಸಂಗಡ ನಾನು ಮಾಡಿದ ಒಡಂಬಡಿಕೆಯ ಪ್ರಕಾರ ನಿನ್ನ ರಾಜ್ಯದ ಸಿಂಹಾಸನವನ್ನು ಸ್ಥಿರಪಡಿಸುತ್ತೇನೆ.
7:19b.2CH.007.019 ಆದರೆ ನೀವು ಹಿಂದಿರುಗಿ ನಾನು ನಿಮ್ಮ ಮುಂದೆ ಇಟ್ಟ ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ತೊರೆದು ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ
7:20b.2CH.007.020 ನಾನು ಅವರಿಗೆ ಕೊಟ್ಟ ನನ್ನ ದೇಶದೊಳಗಿಂದ ಅವರನ್ನು ನಿರ್ಮೂಲ ಮಾಡುವೆನು. ಇದಲ್ಲದೆ ನನ್ನ ಹೆಸರಿಗೋಸ್ಕರ ನಾನು ಪರಿಶುದ್ಧ ಮಾಡಿದ ಈ ಆಲ ಯವನ್ನು ನನ್ನ ಸಮ್ಮುಖದಿಂದ ತಳ್ಳಿ ಅದನ್ನು ಸಮಸ್ತ ಜನಗಳಲ್ಲಿ ಗಾದೆಯಾಗಿಯೂ ಹಾಸ್ಯವಾಗಿಯೂ ಮಾಡುವೆನು.
7:21b.2CH.007.021 ಎತ್ತರವಾಗಿರುವ ಈ ಮನೆಯು ಹಾದು ಹೋಗುವ ಪ್ರತಿ ಮನುಷ್ಯನಿಗೆ ಆಶ್ಚರ್ಯ ವಾಗಿರುವದು; ಅವನು ಈ ದೇಶಕ್ಕೂ ಈ ಮನೆಗೂ ಕರ್ತನು ಹೀಗೆ ಯಾಕೆ ಮಾಡಿದನು ಅನ್ನುವನು.ಅದಕ್ಕೆ ಅವರು ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ತೊರೆದು ಅನ್ಯದೇವರುಗಳನ್ನು ಹಿಂಬಾಲಿಸಿ ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದ ಆತನು ಈ ಕೇಡೆಲ್ಲಾ ಅವರ ಮೇಲೆ ಬರಮಾಡಿದನು ಎಂದು ಹೇಳುವರು.
7:22b.2CH.007.022 ಅದಕ್ಕೆ ಅವರು ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ತೊರೆದು ಅನ್ಯದೇವರುಗಳನ್ನು ಹಿಂಬಾಲಿಸಿ ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದ ಆತನು ಈ ಕೇಡೆಲ್ಲಾ ಅವರ ಮೇಲೆ ಬರಮಾಡಿದನು ಎಂದು ಹೇಳುವರು.
8
8:1b.2CH.008.001 ಸೊಲೊಮೋನನು ಕರ್ತನ ಆಲಯವನ್ನೂ ತನ್ನ ಮನೆಯನ್ನೂ ಇಪ್ಪತ್ತು ವರುಷ ಗಳಲ್ಲಿ ಕಟ್ಟಿದ ತರುವಾಯ ಆದದ್ದೇನಂದರೆ,
8:2b.2CH.008.002 ಹೂರಾ ಮನು ಸೊಲೊಮೋನನಿಗೆ ತಿರಿಗಿ ಕೊಟ್ಟ ಪಟ್ಟಣಗ ಳನ್ನು ಸೊಲೊಮೋನನು ಕಟ್ಟಿಸಿ ಇಸ್ರಾಯೇಲ್ ಮಕ್ಕಳನ್ನು ಅಲ್ಲಿ ನಿವಾಸವಾಗಿರುವಂತೆ ಮಾಡಿದನು.
8:3b.2CH.008.003 ಸೊಲೊಮೋನನು ಹಮಾತು ಚೋಬಕ್ಕೆ ಹೋಗಿ ಅದನ್ನು ಜಯಿಸಿದನು.
8:4b.2CH.008.004 ಅವನು ಅರಣ್ಯದಲ್ಲಿರುವ ತದ್ಮೋರನ್ನೂ ಹಮಾತಿನಲ್ಲಿರುವ ಉಗ್ರಾಣದ ಪಟ್ಟಣ ಗಳನ್ನೂ ಕಟ್ಟಿಸಿದನು.
8:5b.2CH.008.005 ಗೋಡೆಗಳೂ ಬಾಗಲುಗಳೂ ಅಗುಳಿಗಳೂ ಉಳ್ಳ ಕೋಟೆ ಪಟ್ಟಣಗಳಾದ ಮೇಲಿನ ಬೇತ್ಹೋರೋನನ್ನೂ ಕೆಳಗಿನ ಬೇತ್ಹೋರೋನನ್ನೂ ಬಾಲಾತೂರನ್ನೂ ಸೊಲೊಮೋನನಿಗೆ ಇದ್ದ ಸಮಸ್ತ ಉಗ್ರಾಣದ ಪಟ್ಟಣಗಳನ್ನೂ ಸಮಸ್ತ ರಥಗಳ ಪಟ್ಟಣ ಗಳನ್ನೂ ರಾಹುತರ ಪಟ್ಟಣಗಳನ್ನೂ ಕಟ್ಟಿಸಿದನು.
8:6b.2CH.008.006 ಸೊಲೊಮೋನನು ಯೆರೂಸಲೇಮಿನಲ್ಲಿಯೂ ಲೆಬ ನೋನಿನಲ್ಲಿಯೂ ತಾನು ಆಳುವ ಸಮಸ್ತ ದೇಶದ ಲ್ಲೆಲ್ಲಾ ಕಟ್ಟಿಸಲು ಇಚ್ಛೆಯಾದದ್ದನ್ನು ಕಟ್ಟಿಸಿದನು.
8:7b.2CH.008.007 ಸೊಲೊಮೋನನು ಇಸ್ರಾಯೇಲಿನ ಮಕ್ಕಳಲ್ಲದ ಹಿತ್ತಿಯರೂ ಅಮೋರಿಯರೂ ಪೆರಜೀಯರೂ ಹಿವ್ವಿಯರೂ ಯೆಬೂಸಿಯರೂ ಇವರಲ್ಲಿ ಉಳಿದ ಸಮಸ್ತ ಜನರೂ
8:8b.2CH.008.008 ಇವರ ತರುವಾಯ ದೇಶದಲ್ಲಿ ಇಸ್ರಾಯೇಲ್ಯರು ಉಳಿಸಿದ ಅವರ ಮಕ್ಕಳೂ ಇಂದಿನ ವರೆಗೂ ಕಪ್ಪವನ್ನು ಕೊಡುವಂತೆ ಮಾಡಿ ದನು.
8:9b.2CH.008.009 ಆದರೆ ಇಸ್ರಾಯೇಲ್ಯರನ್ನು ಸೊಲೊ ಮೋನನು ತನ್ನ ಕೆಲಸಕ್ಕೆ ದಾಸರಾಗಿ ಮಾಡಿಕೊಡ ಲಿಲ್ಲ. ಆದರೆ ಅವರು ಯುದ್ಧಸ್ಥರಾಗಿಯೂ ಅಧಿ ಪತಿಗಳಲ್ಲಿ ಪ್ರಧಾನರಾಗಿಯೂ ತನ್ನ ರಥಗಳ ಮೇಲೆಯೂ ರಾಹುತರ ಮೇಲೆಯೂ ಅಧಿಪತಿಗ ಳಾಗಿ ಇರುವಂತೆ ಮಾಡಿದನು.
8:10b.2CH.008.010 ಇವರು ಅರಸ ನಾದ ಸೊಲೊಮೋನನ ಅಧಿಪತಿಗಳಲ್ಲಿ ಪ್ರಧಾನ ರಾಗಿದ್ದರು. ಜನರನ್ನು ಆಳುವವರು ಇನ್ನೂರ ಐವತ್ತು ಮಂದಿ ಇದ್ದರು.
8:11b.2CH.008.011 ಸೊಲೊಮೋನನು ಫರೋಹನ ಕುಮಾರ್ತೆ ಯನ್ನು ದಾವೀದನ ಪಟ್ಟಣದಿಂದ ತಾನು ಅವಳಿ ಗೋಸ್ಕರ ಕಟ್ಟಿಸಿದ ಮನೆಗೆ ಬರಮಾಡಿದನು. ಕರ್ತನ ಒಡಂಬಡಿಕೆಯ ಮಂಜೂಷವು ಬಂದ ಸ್ಥಳಗಳು ಪರಿಶುದ್ಧವಾಗಿರುವದರಿಂದ ನನ್ನ ಹೆಂಡತಿಯು ಇಸ್ರಾ ಯೇಲಿನ ಅರಸನಾದ ದಾವೀದನ ಮನೆಯಲ್ಲಿ ವಾಸ ವಾಗಿರಕೂಡದೆಂದು ಹೇಳಿದನು.
8:12b.2CH.008.012 ಆಗ ಸೊಲೊಮೋನನು ದ್ವಾರಾಂಗಳದ ಮುಂದೆ ತಾನು ಕಟ್ಟಿಸಿದ ಕರ್ತನ ಬಲಿಪೀಠದ ಮೇಲೆ ಕರ್ತನಿಗೆ ದಹನಬಲಿಗಳನ್ನು ಅರ್ಪಿಸಿದನು.
8:13b.2CH.008.013 ದಿನಂಪ್ರತಿಯಲ್ಲಿ ಮೋಶೆಯ ಆಜ್ಞೆ ಪ್ರಕಾರ ಸಬ್ಬ ತ್ತುಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ವರುಷದಲ್ಲಿ ಮೂರು ಸಾರಿ ಪವಿತ್ರ ಹಬ್ಬಗಳಾದ ಹುಳಿ ಇಲ್ಲದ ರೊಟ್ಟಿಯ ಹಬ್ಬದಲ್ಲಿಯೂ ವಾರಗಳ ಹಬ್ಬದಲ್ಲಿಯೂ ಪರ್ಣಶಾಲೆಗಳ ಹಬ್ಬದಲ್ಲಿಯೂ ಬಲಿಗಳನ್ನು ಅರ್ಪಿಸಿದನು.
8:14b.2CH.008.014 ಅವನು ತನ್ನ ತಂದೆಯಾದ ದಾವೀದನ ಕ್ರಮದ ಪ್ರಕಾರ ಅವರ ಸೇವೆಗೆ ಯಾಜಕರ ಸರದಿ ಗಳನ್ನೂ ಪ್ರತಿ ದಿವಸಕ್ಕೆ ಬೇಕಾದ ಕಾರ್ಯದ ಪ್ರಕಾರ ಯಾಜಕರ ಮುಂದೆ ಸ್ತುತಿಸುವದಕ್ಕೂ ಸೇವೆಮಾಡು ವದಕ್ಕೂ ತಮ್ಮ ವಿಚಾರಗಳಲ್ಲಿ ಲೇವಿಯರನ್ನೂ ಸೇವೆಯ ಬಾಗಲಲ್ಲಿ ತಮ್ಮ ಸರದಿಗಳಾಗಿ ದ್ವಾರಪಾಲಕರನ್ನೂ ನೇಮಿಸಿದನು. ದೇವರ ಮನುಷ್ಯನಾದ ದಾವೀದನು ಹಾಗೆಯೇ ನೇಮಿಸಿದ್ದನು.
8:15b.2CH.008.015 ಅವರು ಯಾವ ಕಾರ್ಯ ದಲ್ಲಾ ದರೂ ಬೊಕ್ಕಸಗಳಲ್ಲಾದರೂ ಅರಸನು ಯಾಜಕರಿಗೂ ಲೇವಿಯರಿಗೂ ಹೇಳಿದ ಆಜ್ಞೆಯನ್ನು ತೊರೆದು ಬಿಡಲಿಲ್ಲ.
8:16b.2CH.008.016 ಆದರೆ ಸೊಲೊಮೋನನ ಕೆಲಸವೆಲ್ಲಾ ಕರ್ತನ ಆಲಯದ ಅಸ್ತಿವಾರ ಹಾಕಿದ ದಿವಸದ ವರೆಗೂ ಅದನ್ನು ಕಟ್ಟಿಸಿ ತೀರಿಸುವ ಮಟ್ಟಿಗೂ ಸಿದ್ಧಮಾಡಲ್ಪಟ್ಟಿತು. ಹೀಗೆಯೇ ಕರ್ತನ ಆಲಯವು ಸಿದ್ಧವಾಯಿತು.
8:17b.2CH.008.017 ಆಗ ಸೊಲೊಮೋನನು ಎದೋಮ್ ದೇಶದ ಸಮುದ್ರ ತೀರದಲ್ಲಿರುವ ಎಚ್ಯೋನ್ಗೆಬೆರಿಗೂ ಏಲೋ ತಿಗೂ ಹೊರಟುಹೋದನು.ಹೂರಾಮನು ತನ್ನ ಸೇವಕರ ಕೈಯಿಂದ ಹಡಗುಗಳನ್ನೂ ಸಮುದ್ರ ತಿಳಿದ ವರಾದ ಸೇವಕರನ್ನೂ ಅವನ ಬಳಿಗೆ ಕಳುಹಿಸಿದನು. ಅವರು ಸೊಲೊಮೋನನ ಸೇವಕರ ಸಂಗಡ ಓಫೀರಿಗೆ ಹೋಗಿ ಅಲ್ಲಿಂದ ಸೊಲೊಮೋನನಿಗೆ ನಾನೂರೈವತ್ತು ತಲಾಂತು ತೂಕ ಬಂಗಾರವನ್ನು ತೆಗೆದುಕೊಂಡು ಬಂದರು.
8:18b.2CH.008.018 ಹೂರಾಮನು ತನ್ನ ಸೇವಕರ ಕೈಯಿಂದ ಹಡಗುಗಳನ್ನೂ ಸಮುದ್ರ ತಿಳಿದ ವರಾದ ಸೇವಕರನ್ನೂ ಅವನ ಬಳಿಗೆ ಕಳುಹಿಸಿದನು. ಅವರು ಸೊಲೊಮೋನನ ಸೇವಕರ ಸಂಗಡ ಓಫೀರಿಗೆ ಹೋಗಿ ಅಲ್ಲಿಂದ ಸೊಲೊಮೋನನಿಗೆ ನಾನೂರೈವತ್ತು ತಲಾಂತು ತೂಕ ಬಂಗಾರವನ್ನು ತೆಗೆದುಕೊಂಡು ಬಂದರು.
9
9:1b.2CH.009.001 ಶೆಬದ ರಾಣಿಯು ಸೊಲೊಮೋನನ ಕೀರ್ತಿಯನ್ನು ಕೇಳಿದಾಗ ಒಗಟುಗಳಿಂದ ಅವನನ್ನು ಶೋಧಿಸಲು ಅವಳು ಮಹಾಗುಂಪಿನ ಸಂಗಡ ಸುಗಂಧಗಳನ್ನೂ ಬಹು ಬಂಗಾರವನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಹೊತ್ತುಕೊಂಡಿರುವ ಒಂಟೆಗಳ ಸಂಗಡ ಯೆರೂಸಲೇಮಿಗೆ ಬಂದಳು. ಅವಳು ಸೊಲೊಮೋನನ ಬಳಿಗೆ ಬಂದ ಮೇಲೆ ತನ್ನ ಹೃದಯದಲ್ಲಿದ್ದ ಎಲ್ಲವನ್ನು ಅವನ ಸಂಗಡ ಮಾತಾ ಡಿದಳು.
9:2b.2CH.009.002 ಆಗ ಸೊಲೊಮೋನನು ಅವಳ ಪ್ರಶ್ನೆ ಗಳಿಗೆಲ್ಲಾ ಉತ್ತರಕೊಟ್ಟನು. ಸೊಲೊಮೋನನು ಅವ ಳಿಗೆ ಉತ್ತರ ಕೊಡದಂಥ, ಅವನಿಗೆ ಬಚ್ಚಿಡಲ್ಪಟ್ಟಿದ್ದು ಒಂದೂ ಇರಲಿಲ್ಲ.
9:3b.2CH.009.003 ಶೆಬದ ರಾಣಿಯು ಸೊಲೊ ಮೋನನ ಜ್ಞಾನವನ್ನೂ ಅವನು ಕಟ್ಟಿಸಿದ ಮನೆಯನ್ನೂ
9:4b.2CH.009.004 ಅವನ ಮೇಜಿನ ಭೋಜನವನ್ನೂ ಅವನ ಸೇವಕರು ಕೂತಿರುವದನ್ನೂ ನಿಂತಿರುವದನ್ನೂ ಅವನ ವಸ್ತ್ರಗಳನ್ನೂ ಅವನ ಪಾನದಾಯಕರನ್ನೂ ಅವರ ವಸ್ತ್ರಗಳನ್ನೂ ಅವನು ಕರ್ತನ ಆಲಯಕ್ಕೆ ಹೋಗುವ ಮಾರ್ಗವನ್ನೂ ನೋಡಿದಾಗ ಅವಳಿಗೆ ವಿಸ್ಮಯವಾಯಿತು.
9:5b.2CH.009.005 ಅವಳು ಅರಸನಿಗೆ ನನ್ನ ದೇಶದಲ್ಲಿ ನಿನ್ನ ಕ್ರಿಯೆಗಳನ್ನು ಕುರಿತೂ ನಿನ್ನ ಜ್ಞಾನವನ್ನು ಕುರಿತೂ ನಾನು ಕೇಳಿದ ಮಾತು ಸತ್ಯ.
9:6b.2CH.009.006 ಆದರೆ ನಾನು ಬಂದು ನನ್ನ ಕಣ್ಣುಗಳಿಂದ ನೋಡುವ ವರೆಗೆ ಆ ಮಾತುಗಳನ್ನು ನಂಬದೆ ಹೋದೆನು; ಇಗೋ, ನಿನ್ನ ಮಹಾಜ್ಞಾನದಲ್ಲಿ ಅರ್ಧ ವಾದರೂ ನನಗೆ ಹೇಳಲ್ಪಟ್ಟಿದ್ದಿಲ್ಲ; ನಾನು ಕೇಳಿದ್ದಕ್ಕಿಂತ ನಿನ್ನ ಕೀರ್ತಿ ಅಧಿಕವಾಗಿರುವದು.
9:7b.2CH.009.007 ನಿನ್ನ ಮನುಷ್ಯರು ಭಾಗ್ಯವಂತರು; ನಿನ್ನ ಮುಂದೆ ಯಾವಾಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಸೇವಕರು ಭಾಗ್ಯ ವಂತರು.
9:8b.2CH.009.008 ನಿನ್ನ ಕರ್ತನಾದ ದೇವರಿಗೋಸ್ಕರ ಅರಸ ನಾಗಿರಲು ತನ್ನ ಸಿಂಹಾಸನದ ಮೇಲೆ ನಿನ್ನನ್ನು ಇರಿ ಸಲು ನಿನ್ನಲ್ಲಿ ಇಷ್ಟಪಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ. ನಿನ್ನ ದೇವರು ಇಸ್ರಾಯೇಲನ್ನು ಯುಗ ಯುಗಕ್ಕೂ ನಿಲ್ಲಿಸಲು ಅವರನ್ನು ಪ್ರೀತಿಮಾಡಿದ್ದರಿಂದ ನ್ಯಾಯವನ್ನೂ ನೀತಿಯನ್ನೂ ನಡಿಸಲು ಆತನು ನಿನ್ನನ್ನು ಅವರ ಮೇಲೆ ಅರಸನಾಗಿರಲು ಮಾಡಿದನು ಅಂದಳು.
9:9b.2CH.009.009 ಅವಳು ಅರಸನಿಗೆ ನೂರಿಪ್ಪತ್ತು ತಲಾಂತು ತೂಕ ಬಂಗಾರವನ್ನೂ ಬಹು ಹೆಚ್ಚಾದ ಸುಗಂಧಗಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟಂಥ ಸುಂಗಧಗಳು ತರುವಾಯ ಬಂದದ್ದಿಲ್ಲ.
9:10b.2CH.009.010 ಇದಲ್ಲದೆ ಓಫೀರಿನಿಂದ ಬಂಗಾರವನ್ನು ತಂದ ಹೂರಾಮನ ಸೇವಕರೂ ಸೊಲೊಮೋನನ ಸೇವ ಕರೂ ಅಲ್ಮಗ್ ಮರಗಳನ್ನೂ ಅಮೂಲ್ಯವಾದ ಕಲ್ಲುಗ ಳನ್ನೂ ತಂದರು.
9:11b.2CH.009.011 ಅರಸನು ಆ ಸುಗಂಧ ಮರಗಳಿಂದ ಕರ್ತನ ಆಲಯಕ್ಕೋಸ್ಕರ ಅರಸನ ಮನೆಗೋಸ್ಕರವೂ ಸೋಪಾನಗಳನ್ನೂ ಹಾಡುವವರಿಗೋಸ್ಕರ ಕಿನ್ನರಿಗ ಳನ್ನೂ ವೀಣೆಗಳನ್ನೂ ಮಾಡಿಸಿದನು; ಯೆಹೂದ ದೇಶದಲ್ಲಿ ಅದಕ್ಕಿಂತ ಮುಂಚೆ ಅಂಥವುಗಳು ಕಾಣಲಿಲ್ಲ.
9:12b.2CH.009.012 ಶೆಬದ ರಾಣಿಯು ಅರಸನಿಗೆ ತಂದದ್ದಕ್ಕೆ ಬದ ಲಾಗಿ ಅರಸನಾದ ಸೊಲೊಮೋನನು ಕೊಟ್ಟದ್ದು ಹೊರತಾಗಿ ಅವಳು ಇಚ್ಛಿಸಿ ಕೇಳಿದ್ದನ್ನೆಲ್ಲಾ ಅವಳಿಗೆ ಕೊಟ್ಟನು. ಆಗ ಅವಳು ತಿರಿಗಿಕೊಂಡು ತನ್ನ ದೇಶಕ್ಕೆ ಹೋದಳು; ಅವಳೂ ಅವಳ ಸೇವಕರೂ ಕೂಡ ಹೋದರು.
9:13b.2CH.009.013 ಆದರೆ ವರ್ತಕರೂ ವ್ಯಾಪಾರಸ್ಥರೂ ತಂದದ್ದು ಹೊರತಾಗಿ ಒಂದು ವರುಷದಲ್ಲಿ ಸೊಲೊಮೋನನಿಗೆ ಬಂದ ಬಂಗಾರದ ತೂಕವು ಆರುನೂರ ಅರವತ್ತಾರು ತಲಾಂತು ತೂಕ ಬಂಗಾರವಾಗಿತ್ತು.
9:14b.2CH.009.014 ಇದಲ್ಲದೆ ಅರಬಸ್ಥಾನದ ಅರಸುಗಳೂ ದೇಶದ ಅಧಿಪತಿಗಳೂ ಸೊಲೊಮೋನನಿಗೆ ಬೆಳ್ಳಿಬಂಗಾರವನ್ನು ತಂದರು.
9:15b.2CH.009.015 ಅರಸನಾದ ಸೊಲೊಮೋನನು ಅಪರಂಜಿಯಿಂದ ಇನ್ನೂರು ಖೇಡ್ಯಗಳನ್ನು ಮಾಡಿಸಿದನು. ಒಂದೊಂದು ಖೇಡ್ಯಕ್ಕೆ ಆರುನೂರು ಶೆಕೇಲು ತೂಕ ಅಪರಂಜಿ ಇತ್ತು.
9:16b.2CH.009.016 ಹಾಗೆಯೇ ಅಪರಂಜಿಯಿಂದ ಮುನ್ನೂರು ಗುರಾಣಿಗಳನ್ನು ಮಾಡಿಸಿದನು. ಒಂದೊಂದು ಗುರಾ ಣಿಗೆ ಮುನ್ನೂರು ಶೆಕೇಲು ಅಪರಂಜಿ ಇತ್ತು. ಅರಸನು ಇವುಗಳನ್ನು ಲೆಬನೋನಿನ ಅಡವಿಯ ಮನೆಯಲ್ಲಿ ಇಟ್ಟನು.
9:17b.2CH.009.017 ಇದಲ್ಲದೆ ಅರಸನು ದಂತದಿಂದ ದೊಡ್ಡ ಸಿಂಹಾ ಸನವನ್ನು ಮಾಡಿಸಿ ಅದನ್ನು ಅಪರಂಜಿಯಿಂದ ಹೊದಿ ಸಿದನು.
9:18b.2CH.009.018 ಈ ಸಿಂಹಾಸನಕ್ಕೆ ಆರು ಮೆಟ್ಟಲುಗಳು ಇದ್ದವು. ಸಿಂಹಾಸನಕ್ಕೆ ತಗಲಿಸಲ್ಪಟ್ಟ ಬಂಗಾರದ ಪಾದ ಪೀಠ ಇತ್ತು. ಕುಳಿತುಕೊಳ್ಳುವ ಸ್ಥಳದ ಎರಡು ಪಾರ್ಶ್ವ ದಲ್ಲಿಯೂ ಕೈಗಳಿದ್ದವು; ಆ ಕೈಗಳ ಬಳಿಯಲ್ಲಿ ಎರಡು ಸಿಂಹಗಳು ನಿಂತಿದ್ದವು.
9:19b.2CH.009.019 ಹನ್ನೆರಡು ಸಿಂಹಗಳು ಆರು ಮೆಟ್ಟಲುಗಳ ಮೇಲೆ ಎರಡು ಪಾರ್ಶ್ವದಲ್ಲಿ ನಿಂತಿ ದ್ದವು. ಯಾವ ರಾಜ್ಯದಲ್ಲಿಯೂ ಅಂಥದ್ದು ಮಾಡಿ ದ್ದಿಲ್ಲ.
9:20b.2CH.009.020 ಅರಸನಾದ ಸೊಲೊಮೋನನು ಕುಡಿಯುವ ಪಾತ್ರೆಗಳೆಲ್ಲಾ ಬಂಗಾರದವುಗಳು. ಲೆಬನೋನಿನ ಅಡವಿಯ ಮನೆಯ ಪಾತ್ರೆಗಳೆಲ್ಲಾ ಹೀಗೆಯೇ ಅಪ ರಂಜಿಯವುಗಳು. ಬೆಳ್ಳಿಯದು ಒಂದೂ ಇರಲಿಲ್ಲ. ಸೊಲೊಮೋನನ ದಿವಸಗಳಲ್ಲಿ ಬೆಳ್ಳಿಗೆ ಬೆಲೆಯೇ ಇರಲಿಲ್ಲ.
9:21b.2CH.009.021 ಯಾಕಂದರೆ ಹೂರಾಮನ ಸೇವಕರ ಸಂಗಡ ಅರಸನ ಹಡಗುಗಳು ತಾರ್ಷಿಷಿಗೆ ಹೋಗಿ ಮೂರು ವರುಷಕ್ಕೆ ಒಂದುಸಾರಿ ಬಂಗಾರವನ್ನೂ ಬೆಳ್ಳಿ ಯನ್ನೂ ದಂತವನ್ನೂ ಕೋತಿಗಳನ್ನೂ ನವಿಲುಗಳನ್ನೂ ತಕ್ಕೊಂಡು ಬರುತ್ತಿದ್ದವು.
9:22b.2CH.009.022 ಹೀಗೆಯೇ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ ಜ್ಞಾನದ ಲ್ಲಿಯೂ ಭೂಮಿಯ ಸಮಸ್ತ ಅರಸುಗಳಿಗಿಂತ ದೊಡ್ಡವನಾಗಿದ್ದನು.
9:23b.2CH.009.023 ದೇವರು ಸೊಲೊಮೋನನ ಹೃದಯದಲ್ಲಿ ಉಂಟುಮಾಡಿದ ಅವನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿಯ ಸಮಸ್ತ ಅರಸುಗಳು ಸೊಲೊಮೋನನ ಮುಖದರ್ಶನವನ್ನು ಹುಡುಕಿದರು.
9:24b.2CH.009.024 ಅವರವರು ಕಾಣಿಕೆಯಾಗಿ ಬೆಳ್ಳಿಯ ಪಾತ್ರೆಗಳನ್ನೂ ಬಂಗಾರದ ಪಾತ್ರೆಗಳನ್ನೂ ವಸ್ತ್ರಗಳನ್ನೂ ಆಯುಧ ಗಳನ್ನೂ ಸುಗಂಧಗಳನ್ನೂ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ವರುಷ ವರುಷಕ್ಕೂ ನೇಮಕದ ಪ್ರಕಾರ ತರುತ್ತಿದ್ದರು.
9:25b.2CH.009.025 ಸೊಲೊಮೋನನಿಗೆ ನಾಲ್ಕು ಸಾವಿರ ಜೋಡು ಕುದುರೆಗಳೂ ರಥಗಳೂ ಇದ್ದವು. ಇದ ಲ್ಲದೆ ಹನ್ನೆರಡು ಸಾವಿರ ರಾಹುತರಿದ್ದರು. ಅವರನ್ನು ರಥಗಳ ಪಟ್ಟಣಗಳಲ್ಲಿಯೂ ಅರಸನ ಬಳಿಯಲ್ಲಿ ಯೆರೂಸಲೇಮಿನಲ್ಲಿಯೂ ಇರಿಸಿದನು.
9:26b.2CH.009.026 ಅವನು ನದಿ ಮೊದಲುಗೊಂಡು ಫಿಲಿಷ್ಟಿಯರ ದೇಶವನ್ನು ಹಿಡಿದು ಐಗುಪ್ತದ ಮೇರೆಯ ವರೆಗೂ ಇರುವ ಸಮಸ್ತ ಅರಸುಗಳ ಮೇಲೆ ಆಳುತ್ತಾ ಇದ್ದನು.
9:27b.2CH.009.027 ಅರಸನು ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲು ಗಳ ಹಾಗೆಯೂ ದೇವದಾರು ಮರಗಳನ್ನು ತಗ್ಗಿನ ಲ್ಲಿರುವ ಆಲದ ಮರಗಳ ಹಾಗೆಯೂ ಬಹಳವಾಗಿ ಮಾಡಿದನು.
9:28b.2CH.009.028 ಇದಲ್ಲದೆ ಐಗುಪ್ತದಿಂದಲೂ ಸಮಸ್ತ ದೇಶಗಳಿಂದಲೂ ಸೊಲೊಮೋನನಿಗೆ ಕುದುರೆಗಳನ್ನು ತಕ್ಕೊಂಡು ಬಂದರು.
9:29b.2CH.009.029 ಸೊಲೊಮೋನನ ಮಿಕ್ಕಾದ ಕ್ರಿಯೆಗಳು, ಮೊದ ಲನೆಯವುಗಳೂ ಕಡೆಯವುಗಳೂ ಪ್ರವಾದಿಯಾದ ನಾತಾನನ ಪುಸ್ತಕದಲ್ಲಿಯೂ ಶೀಲೋವಿನವನಾದ ಅಹೀಯನ ಪ್ರವಾದನೆಯಲ್ಲಿಯೂ ದರ್ಶಿಯಾದ ಇದ್ದೋವನು ನೆಬಾಟನ ಮಗನಾದ ಯಾರೊಬ್ಬಾಮ ನಿಗೆ ವಿರೋಧವಾಗಿ ಹೇಳಿದ ದರ್ಶನಗಳಲ್ಲಿಯೂ ಅವು ಬರೆಯಲ್ಪಟ್ಟವಲ್ಲವೋ?
9:30b.2CH.009.030 ಹೀಗೆಯೇ ಸೊಲೊ ಮೋನನು ಯೆರೂಸಲೇಮಿನಲ್ಲಿ ಸಮಸ್ತ ಇಸ್ರಾಯೇ ಲಿನ ಮೇಲೆ ನಾಲ್ವತ್ತು ವರುಷಗಳು ಆಳಿದನು.ಸೊಲೊಮೋನನು ತನ್ನ ಪಿತೃಗಳ ಸಂಗಡ ಮಲಗಿ ದನು; ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ಹೂಣಿಡಲ್ಪಟ್ಟನು. ಅವನ ಮಗನಾದ ರೆಹಬ್ಬಾಮನು ಅವನಿಗೆ ಬದಲಾಗಿ ಆಳಿದನು.
9:31b.2CH.009.031 ಸೊಲೊಮೋನನು ತನ್ನ ಪಿತೃಗಳ ಸಂಗಡ ಮಲಗಿ ದನು; ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ಹೂಣಿಡಲ್ಪಟ್ಟನು. ಅವನ ಮಗನಾದ ರೆಹಬ್ಬಾಮನು ಅವನಿಗೆ ಬದಲಾಗಿ ಆಳಿದನು.
10
10:1b.2CH.010.001 ಆಗ ರೆಹಬ್ಬಾಮನು ಶೆಕೆಮಿಗೆ ಹೋದನು; ಅವನನ್ನು ಅರಸನಾಗಿ ಮಾಡುವದಕ್ಕೆ ಸಮಸ್ತ ಇಸ್ರಾಯೇಲ್ಯರು ಶೆಕೆಮಿಗೆ ಬಂದರು.
10:2b.2CH.010.002 ಅರಸ ನಾದ ಸೊಲೊಮೋನನ ಸಮ್ಮುಖದಿಂದ ಓಡಿಹೋಗಿ ಐಗುಪ್ತದಲ್ಲಿ ವಾಸವಾಗಿದ್ದು ಐಗುಪ್ತದಲ್ಲಿರುವ ನೆಬಾ ಟನ ಮಗನಾದ ಯಾರೊಬ್ಬಾಮನು ಇದನ್ನು ಕೇಳಿ ಐಗುಪ್ತದಿಂದ ತಿರಿಗಿ ಬಂದನು.
10:3b.2CH.010.003 ಅವರು ಅವನನ್ನು ಕರೇಕಳುಹಿಸಿದರು. ಆಗ ಯಾರೊಬ್ಬಾಮನೂ ಸಮಸ್ತ ಇಸ್ರಾಯೇಲ್ಯರೂ ರೆಹಬ್ಬಾಮನ ಬಳಿಗೆ ಬಂದು
10:4b.2CH.010.004 ಅವನ ಸಂಗಡ ಮಾತನಾಡಿ--ನಿನ್ನ ತಂದೆಯು ನಮ್ಮ ನೊಗವನ್ನು ಕಠಿಣವಾಗಿ ಮಾಡಿದನು; ಈಗ ನೀನು ನಿನ್ನ ತಂದೆಯ ಕಠಿಣವಾದ ಸೇವೆಯನ್ನೂ ಅವನು ನಮ್ಮ ಮೇಲೆ ಹಾಕಿದ ತನ್ನ ಭಾರವಾದ ನೊಗವನ್ನೂ ಹಗುರ ಮಾಡಿದರೆ ನಾವು ನಿನ್ನನ್ನು ಸೇವಿಸುವೆವು ಅಂದರು.
10:5b.2CH.010.005 ಅವನು ಅವರಿಗೆ--ಮೂರು ದಿವಸಗಳಾದ ತರುವಾಯ ತಿರಿಗಿ ನನ್ನ ಬಳಿಗೆ ಬನ್ನಿರಿ ಎಂದು ಹೇಳಿದ್ದರಿಂದ ಜನರು ಹೊರಟುಹೋದರು.
10:6b.2CH.010.006 ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನು ಬದುಕಿರುವಾಗ ಅವನ ಮುಂದೆ ನಿಲ್ಲುತ್ತಿದ್ದ ಹಿರಿಯರ ಆಲೋಚನೆಯನ್ನು ಕೇಳಿ-- ಈ ಜನರಿಗೆ ಪ್ರತ್ಯುತ್ತರಕೊಡಲು ನೀವು ಏನು ಆಲೋಚನೆ ಹೇಳುತ್ತೀರಿ ಅಂದನು.
10:7b.2CH.010.007 ಅವರು ಅವ ನಿಗೆ--ನೀನು ಈ ಜನರಿಗೆ ದಯವುಳ್ಳವನಾಗಿ ಅವ ರನ್ನು ಮೆಚ್ಚಿಸಿ ಅವರಿಗೆ ಒಳ್ಳೇ ಮಾತುಗಳನ್ನು ಆಡಿದರೆ ಅವರು ಎಂದೆಂದಿಗೂ ನಿನ್ನ ಸೇವಕರಾಗಿರುವರು ಅಂದರು.
10:8b.2CH.010.008 ಆದರೆ ಹಿರಿಯರು ತನಗೆ ಹೇಳಿದ ಆಲೋಚನೆಯನ್ನು ಬಿಟ್ಟು ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋಚನೆಯನ್ನು ಅವನು ಕೇಳಿ ಅವರಿಗೆ--
10:9b.2CH.010.009 ನಿನ್ನ ತಂದೆಯು ನಮ್ಮ ಮೇಲೆ ಹಾಕಿದ ನೊಗವನ್ನು ಹಗುರ ಮಾಡೆಂದು ನನಗೆ ಹೇಳಿದ ಈ ಜನರಿಗೆ ಪ್ರತ್ಯುತ್ತರಕೊಡಲು ನೀವು ಯಾವ ಯೋಚನೆ ಹೇಳುತ್ತೀರಿ ಅಂದನು.
10:10b.2CH.010.010 ಆಗ ಅವನ ಕೂಡ ಬೆಳೆದ ಯೌವನಸ್ಥರು ಅವ ನಿಗೆ--ನಿನ್ನ ತಂದೆಯು ನಮ್ಮ ನೊಗವನ್ನು ಭಾರ ಮಾಡಿದನು; ಆದರೆ ನೀನು ಅದನ್ನು ನಮಗೆ ಹಗುರ ಮಾಡೆಂದು
10:11b.2CH.010.011 ನಿನ್ನ ಸಂಗಡ ಮಾತನಾಡಿ ಹೇಳಿದ ಈ ಜನರಿಗೆ ನೀನು ಹೀಗೆ ಹೇಳಬೇಕು--ನನ್ನ ಕಿರು ಬೆರಳು ನನ್ನ ತಂದೆಯ ನಡುವಿಗಿಂತ ದಪ್ಪವಾಗಿರು ವದು. ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೊರಿಸಿದನು; ನಾನಾದರೋ ನಿಮ್ಮ ನೊಗವನ್ನು ಹೆಚ್ಚು ಭಾರವಾಗಿ ಮಾಡುವೆನು. ನನ್ನ ತಂದೆಯು ನಿಮ್ಮನ್ನು ಬೆತ್ತಗಳಿಂದ ಶಿಕ್ಷಿಸಿದನು; ಆದರೆ ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಎಂದು ಹೇಳು ಅಂದರು.
10:12b.2CH.010.012 ಆಗ--ಮೂರನೇ ದಿವಸದಲ್ಲಿ ನನ್ನ ಬಳಿಗೆ ಬನ್ನಿರಿ ಎಂದು ಅರಸನು ಹೇಳಿದ ಪ್ರಕಾರ ಮೂರನೇ ದಿವಸದಲ್ಲಿ ಯಾರೊಬ್ಬಾಮನೂ ಸಮಸ್ತ ಜನರೂ ರೆಹಬ್ಬಾಮನ ಬಳಿಗೆ ಬಂದರು.
10:13b.2CH.010.013 ಅರಸನು ಜನರಿಗೆ ಕಠಿಣವಾದ ಪ್ರತ್ಯುತ್ತರ ಹೇಳಿದನು; ಹಿರಿಯರು ಅವನಿಗೆ ಕೊಟ್ಟ ಆಲೋಚನೆಯನ್ನು ಬಿಟ್ಟು ಯೌವ ನಸ್ಥರ ಆಲೋಚನೆಯ ಪ್ರಕಾರ ಅವರ ಸಂಗಡ ಮಾತನಾಡಿ ಅವರಿಗೆ--
10:14b.2CH.010.014 ನನ್ನ ತಂದೆಯು ನಿಮ್ಮ ನೊಗವನ್ನು ಭಾರ ಮಾಡಿದನು; ನಾನು ಅದನ್ನು ಇನ್ನೂ ಹೆಚ್ಚು ಭಾರ ಮಾಡುತ್ತೇನೆ. ನನ್ನ ತಂದೆಯು ನಿಮ್ಮನ್ನು ಬೆತ್ತಗಳಿಂದ ಶಿಕ್ಷಿಸಿದನು; ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಅಂದನು.
10:15b.2CH.010.015 ಹೀಗೆ ಅರ ಸನು ಜನರ ಮಾತನ್ನು ಕೇಳದೆ ಹೋದನು. ಕರ್ತನು ನೆಬಾಟನ ಮಗನಾದ ಯಾರೊಬ್ಬಾಮನಿಗೆ ಶಿಲೋವಿ ನವನಾದ ಅಹೀಯನ ಮುಖಾಂತರ ಹೇಳಿದ ವಾಕ್ಯವು ಈಡೇರುವದಕ್ಕೆ ಈ ಕಾರಣ ದೇವರಿಂದ ಉಂಟಾ ಯಿತು.
10:16b.2CH.010.016 ಅರಸನು ತಮಗೆ ಕಿವಿಗೊಡದೆ ಹೋದ ನೆಂದು ಸಮಸ್ತ ಇಸ್ರಾಯೇಲ್ಯರು ನೋಡಿ ಅರಸನಿಗೆ ಪ್ರತ್ಯುತ್ತರವಾಗಿ--ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಇಲ್ಲ. ಇಸ್ರಾ ಯೇಲ್ಯರೇ, ನಿಮ್ಮ ಗುಡಾರಗಳಿಗೆ ಹೋಗಿರಿ; ದಾವೀ ದನೇ, ನಿನ್ನ ಮನೆಯನ್ನು ನೋಡಿಕೋ ಎಂದು ಹೇಳಿ ಇಸ್ರಾಯೇಲ್ಯರೆಲ್ಲರು ತಮ್ಮ ಗುಡಾರಗಳಿಗೆ ಹೋದರು.
10:17b.2CH.010.017 ಆದರೆ ಯೆಹೂದದ ಪಟ್ಟಣಗಳಲ್ಲಿ ವಾಸವಾಗಿರುವ ಇಸ್ರಾಯೇಲಿನ ಮಕ್ಕಳ ಮೇಲೆ ರೆಹಬ್ಬಾಮನು ಆಳಿದನು.
10:18b.2CH.010.018 ಆಗ ರೆಹಬ್ಬಾಮನು ಕಪ್ಪಕ್ಕೆ ಗೊತ್ತುಗಾರನಾದ ಹದೋರಾಮನನ್ನು ಕಳು ಹಿಸಲು ಇಸ್ರಾಯೇಲಿನ ಮಕ್ಕಳು ಅವನ ಮೇಲೆ ಕಲ್ಲೆಸೆದು ಕೊಂದುಹಾಕಿದರು, ಆದದರಿಂದ ಅರಸನಾದ ರೆಹಬ್ಬಾಮನು ಯೆರೂಸಲೇಮಿಗೆ ಓಡಿಹೋಗಲು ಆತುರಪಟ್ಟು ತನ್ನ ರಥವನ್ನೇರಿದನು.ಹೀಗೆ ಇಂದಿನ ವರೆಗೂ ಇಸ್ರಾಯೇಲ್ಯರು ದಾವೀದನ ಮನೆಗೆ ವಿರೋಧವಾಗಿ ತಿರುಗಿಬಿದ್ದರು.
10:19b.2CH.010.019 ಹೀಗೆ ಇಂದಿನ ವರೆಗೂ ಇಸ್ರಾಯೇಲ್ಯರು ದಾವೀದನ ಮನೆಗೆ ವಿರೋಧವಾಗಿ ತಿರುಗಿಬಿದ್ದರು.
11
11:1b.2CH.011.001 ರೆಹಬ್ಬಾಮನು ಯೆರೂಸಲೇಮಿಗೆ ಬಂದ ತರುವಾಯ ಅವನು ತನಗೆ ರಾಜ್ಯವನ್ನು ತಿರಿಗಿ ಬರಮಾಡುವ ಹಾಗೆ ಇಸ್ರಾಯೇಲಿಗೆ ವಿರೋಧವಾಗಿ ಯುದ್ಧಮಾಡಲು ಯೆಹೂದ ಬೆನ್ಯಾ ವಿಾನಿನವರೊಳಗಿಂದ ಯುದ್ಧಮಾಡತಕ್ಕವರಾಗಿರುವ ಆಯಲ್ಪಟ್ಟ ಲಕ್ಷದ ಎಂಭತ್ತು ಸಾವಿರ ಜನ ರನ್ನು ಕೂಡಿಸಿದಾಗ
11:2b.2CH.011.002 ಕರ್ತನ ವಾಕ್ಯವು ದೇವರ ಮನುಷ್ಯನಾಗಿರುವ ಶೆಮಾಯನಿಗೆ ಉಂಟಾಯಿತು;
11:3b.2CH.011.003 ಏನಂದರೆ -- ನೀನು ಯೆಹೂದದ ಅರಸನಾದ ಸೊಲೊಮೋನನ ಮಗನಾಗಿರುವ ರೆಹಬ್ಬಾಮನಿಗೂ ಯೆಹೂದ ಬೆನ್ಯಾವಿಾನ್ಯರಲ್ಲಿರುವ
11:4b.2CH.011.004 ಸಮಸ್ತ ಇಸ್ರಾ ಯೇಲ್ಯರಿಗೂ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ನೀವು ನಿಮ್ಮ ಸಹೋದರರಿಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಹೋಗ ಬೇಡಿರಿ; ಪ್ರತಿ ಮನುಷ್ಯನು ತನ್ನ ಮನೆಗೆ ಹಿಂತಿ ರುಗಲಿ. ಈ ಕಾರ್ಯವು ನನ್ನಿಂದ ಉಂಟಾಯಿತು ಅಂದನು. ಆದಕಾರಣ ಅವರು ಕರ್ತನ ವಾಕ್ಯವನ್ನು ಕೇಳಿ ಯಾರೊಬ್ಬಾಮನ ಮೇಲೆ ಹೋಗದೆ ಹಿಂತಿರುಗಿದರು.
11:5b.2CH.011.005 ರೆಹಬ್ಬಾಮನು ಯೆರೂಸಲೇಮಿನಲ್ಲಿ ವಾಸಮಾಡಿ ಯೆಹೂದದಲ್ಲಿ ಕಾವಲು ಪಟ್ಟಣಗಳನ್ನು ಕಟ್ಟಿಸಿದನು.
11:6b.2CH.011.006 ಯಾವವಂದರೆ ಬೇತ್ಲೆಹೇಮ್ ಏತಾಮ್ ತೆಕೋವ
11:7b.2CH.011.007 ಬೇತ್ಚೂರ ಸೋಕೋ
11:8b.2CH.011.008 ಅದುಲ್ಲಾಮ್ ಗತ್‌ಊರು ಮಾರೇಷ್
11:9b.2CH.011.009 ಜೀಫ್ ಅದೋರೈಮ್ ಲಾಕೀಷ್ ಅಜೇಕ
11:10b.2CH.011.010 ಚೋರ್ಗ ಅಯ್ಯಾಲೋನ್ ಹೆಬ್ರೋನ್ ಕಟ್ಟಿಸಿದನು. ಇವು ಯೆಹೂದ ಬೆನ್ಯಾ ವಿಾನ್ ಪ್ರಾಂತ್ಯಗಳಲ್ಲಿ ಕೋಟೆಯುಳ್ಳ ಪಟ್ಟಣ ಗಳಾಗಿವೆ.
11:11b.2CH.011.011 ಇದಲ್ಲದೆ ಅವನು ಕೋಟೆಗಳನ್ನು ಬಲ ಪಡಿಸಿ ಅವುಗಳಲ್ಲಿ ನಾಯಕರನ್ನೂ ಆಹಾರ ಎಣ್ಣೆ ದ್ರಾಕ್ಷಾರಸ ಇರುವ ಉಗ್ರಾಣಗಳನ್ನೂ ಇಟ್ಟನು.
11:12b.2CH.011.012 ಪ್ರತಿ ಪಟ್ಣಣದಲ್ಲಿ ಖೇಡ್ಯಗಳನ್ನೂ ಈಟಿಗಳನ್ನೂ ಇಟ್ಟು ಯೆಹೂದ ಬೆನ್ಯಾವಿಾನಿನವರು ಅವನ ಕಡೆ ಇದ್ದದ್ದರಿಂದ ಅವುಗಳನ್ನು ಬಹಳ ಭದ್ರಪಡಿಸಿದನು.
11:13b.2CH.011.013 ಇದಲ್ಲದೆ ಸಮಸ್ತ ಇಸ್ರಾಯೇಲಿನಲ್ಲಿದ್ದ ಯಾಜ ಕರೂ ಲೇವಿಯರೂ ತಮ್ಮ ಸಮಸ್ತ ಪ್ರಾಂತ್ಯಗಳಿಂದ ಅವನ ಬಳಿಗೆ ಪುನಃ ಬಂದರು.
11:14b.2CH.011.014 ಲೇವಿಯರು ಕರ್ತ ನಿಗೆ ಯಾಜಕ ಸೇವೆಮಾಡದ ಹಾಗೆ ಯಾರೊಬ್ಬಾ ಮನೂ ಅವನ ಮಕ್ಕಳೂ ಅವರನ್ನು ತೆಗೆದುಹಾಕಿ ಉನ್ನತ ಸ್ಥಳಗಳಿಗೋಸ್ಕರವೂ
11:15b.2CH.011.015 ದೆವ್ವಗಳಿಗೋಸ್ಕರವೂ ಯಾರೊಬ್ಬಾಮನು ಮಾಡಿದ ಹೋರಿಗಳಿ ಗೋಸ್ಕರವೂ ತನಗೆ ಯಾಜಕರನ್ನು ನೇಮಿಸಿದ್ದರಿಂದ ಲೇವಿಯರು ತಮ್ಮ ಉಪನಗರಗಳನ್ನೂ ಸ್ವಾಸ್ತ್ಯಗಳನ್ನೂ ಬಿಟ್ಟು ಬಿಟ್ಟು ಯೆಹೂದಕ್ಕೂ ಯೆರೂಸಲೇಮಿಗೂ ಬಂದರು.
11:16b.2CH.011.016 ಇವರ ತರುವಾಯ ಇಸ್ರಾಯೇಲಿನ ಕರ್ತನಾದ ದೇವರನ್ನು ಹುಡುಕಲು ತಮ್ಮ ಹೃದಯ ಗಳನ್ನು ಕೊಟ್ಟು ತಮ್ಮ ಪಿತೃಗಳ ದೇವರಾದ ಕರ್ತನಿಗೆ ಬಲಿ ಅರ್ಪಿಸಲು ಇಸ್ರಾಯೇಲಿನ ಸಮಸ್ತ ಗೋತ್ರ ಗಳಿಂದ ಯೆರೂಸಲೇಮಿಗೆ ಬಂದರು.
11:17b.2CH.011.017 ಹೀಗೆಯೇ ಅವರು ಯೆಹೂದ ರಾಜ್ಯವನ್ನು ದೃಢಪಡಿಸಿ ಸೊಲೊ ಮೋನನ ಮಗನಾದ ರೆಹಬ್ಬಾಮನನ್ನು ಮೂರು ವರುಷಗಳ ವರೆಗೂ ಬಲಪಡಿಸಿದರು. ಯಾಕಂದರೆ ಅವರು ಮೂರು ವರುಷಗಳ ವರೆಗೂ ದಾವೀದ ಸೊಲೊಮೋನ ಇವರ ಮಾರ್ಗದಲ್ಲಿ ನಡೆದರು.
11:18b.2CH.011.018 ರೆಹಬ್ಬಾಮನು ದಾವೀದನ ಮಗನಾದ ಯೆರೀ ಮೋತನಿಗೆ ಇಷಯನ ಮೊಮ್ಮಗಳೂ ಎಲೀಯಾಬನ ಮಗಳು ಆದ ಅಬೀಹೈಲಳಲ್ಲಿ ಹುಟ್ಟಿದ ಮಹ್ಲತ್ ಎಂಬಾಕೆಯನ್ನು ಹೆಂಡತಿಯನ್ನಾಗಿ ತೆಗೆದುಕೊಂಡನು.
11:19b.2CH.011.019 ಅಬೀಹೈಲಳು ಯೆಗೂಷ್, ಶೆಮರ್ಯ, ಜಾಹಮ್ ಎಂಬ ಮಕ್ಕಳನ್ನು ಅವನಿಗೆ ಹೆತ್ತಳು.
11:20b.2CH.011.020 ಇವಳ ತರು ವಾಯ ಅವನು ಅಬ್ಷಾಲೋಮನ ಮಗಳಾದ ಮಾಕ ಳನ್ನು ಹೆಂಡತಿಯಾಗಿ ತಕ್ಕೊಂಡನು. ಇವಳು ಅವನಿಗೆ ಅಬೀಯನ್ನೂ ಅತ್ತೈಯನ್ನೂ ಜೀಜನನ್ನೂ ಶೆಲೋ ವಿಾತನ್ನೂ ಹೆತ್ತಳು.
11:21b.2CH.011.021 ರೆಹಬ್ಬಾಮನಿಗೆ ಹದಿನೆಂಟು ಮಂದಿ ಹೆಂಡತಿಯರೂ ಅರವತ್ತು ಮಂದಿ ಉಪ ಪತ್ನಿಯರೂ ಇದ್ದರು; ಅವನು ಇಪ್ಪತ್ತೆಂಟು ಮಂದಿ ಕುಮಾರರನ್ನೂ ಅರವತ್ತು ಮಂದಿ ಕುಮಾರ್ತೆಯರನ್ನೂ ಪಡೆದನು. ಆದರೆ ಅವನು ತನ್ನ ಎಲ್ಲಾ ಹೆಂಡತಿ ಯರಿಗಿಂತಲೂ ಉಪಪತ್ನಿಯರಿಗಿಂತಲೂ ಅಬ್ಷಾಲೋ ಮನ ಮಗಳಾದ ಮಾಕಳನ್ನು ಪ್ರೀತಿಮಾಡಿದನು.
11:22b.2CH.011.022 ರೆಹಬ್ಬಾಮನು ಮಾಕಳ ಮಗನಾದ ಅಬೀಯನನ್ನು ಅವನ ಸಹೋದರರಲ್ಲಿ ನಾಯಕನಾಗಿರುವಂತೆ ಮುಖ್ಯ ಸ್ಥನಾಗಿ ಮಾಡಿದನು. ಅವನನ್ನು ಅರಸನಾಗಿ ಮಾಡಲು ಮನಸ್ಸುಳ್ಳವನಾಗಿದ್ದನು.ಅವನು ವಿವೇಕದಿಂದ ನಡೆದು ತನ್ನ ಎಲ್ಲಾ ಮಕ್ಕಳನ್ನು ಯೆಹೂದ ಬೆನ್ಯಾವಿಾ ನಿನ ದೇಶಗಳಲ್ಲಿರುವ ಎಲ್ಲಾ ಬಲವಾದ ಪಟ್ಟಣಗ ಳಲ್ಲಿ ಚದುರಿಸಿ ಅವರಿಗೆ ಬಹಳ ದವಸಧಾನ್ಯಗಳನ್ನು ಕೊಟ್ಟನು. ಆದರೆ ಹೆಂಡತಿಯರ ಸಮೂಹವನ್ನು ಆಶಿಸಿದನು.
11:23b.2CH.011.023 ಅವನು ವಿವೇಕದಿಂದ ನಡೆದು ತನ್ನ ಎಲ್ಲಾ ಮಕ್ಕಳನ್ನು ಯೆಹೂದ ಬೆನ್ಯಾವಿಾ ನಿನ ದೇಶಗಳಲ್ಲಿರುವ ಎಲ್ಲಾ ಬಲವಾದ ಪಟ್ಟಣಗ ಳಲ್ಲಿ ಚದುರಿಸಿ ಅವರಿಗೆ ಬಹಳ ದವಸಧಾನ್ಯಗಳನ್ನು ಕೊಟ್ಟನು. ಆದರೆ ಹೆಂಡತಿಯರ ಸಮೂಹವನ್ನು ಆಶಿಸಿದನು.
12
12:1b.2CH.012.001 ರೆಹಬ್ಬಾಮನು ರಾಜ್ಯವನ್ನು ಸ್ಥಿರಮಾಡಿ ತನ್ನನ್ನು ಬಲಪಡಿಸಿಕೊಂಡಾಗ ಏನಾಯಿ ತಂದರೆ, ಅವನೂ ಅವನ ಸಂಗಡ ಸಮಸ್ತ ಇಸ್ರಾ ಯೇಲ್ಯರೂ ಕರ್ತನ ನ್ಯಾಯಪ್ರಮಾಣವನ್ನು ಬಿಟ್ಟು ಬಿಟ್ಟರು.
12:2b.2CH.012.002 ರೆಹಬ್ಬಾಮನು ಅರಸನಾದ ಐದನೇ ವರುಷ ದಲ್ಲಿ ಏನಾಯಿತಂದರೆ, ಅವರು ಕರ್ತನಿಗೆ ವಿರೋಧ ವಾಗಿ ಅಪರಾಧ ಮಾಡಿದ್ದರಿಂದ ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರೋಧವಾಗಿ ಬಂದನು.
12:3b.2CH.012.003 ಅವನ ಸಂಗಡ ಸಾವಿರದ ಇನ್ನೂರು ರಥಗಳೂ ಅರವತ್ತು ಸಾವಿರ ರಾಹುತರೂ ಇದ್ದರು. ಇದಲ್ಲದೆ ತನ್ನ ಸಂಗಡ ಐಗುಪ್ತದಿಂದ ಬಂದ ಲೂಬ್ಯರೂ ಸುಕ್ಕೀಯರೂ ಕೂಷ್ಯರೂ ಲೆಕ್ಕವಿಲ್ಲದಷ್ಟು ಇದ್ದರು.
12:4b.2CH.012.004 ಅವನು ಯೆಹೂದಕ್ಕೆ ಇದ್ದ ಕೋಟೆಯುಳ್ಳ ಪಟ್ಟಣ ಗಳನ್ನು ಹಿಡಿದು ಯೆರೂಸಲೇಮಿಗೆ ಬಂದನು.
12:5b.2CH.012.005 ಆಗ ಪ್ರವಾದಿಯಾದ ಶೆಮಾಯನು ರೆಹಬ್ಬಾಮನ ಬಳಿಗೂ ಶೀಶಕನ ನಿಮಿತ್ತ ಯೆರೂಸಲೇಮಿನಲ್ಲಿ ಕೂಡಿಕೊಂಡ ಯೆಹೂದದ ಪ್ರಧಾನರ ಬಳಿಗೂ ಬಂದು ಅವರಿಗೆನೀವು ನನ್ನನ್ನು ಬಿಟ್ಟುಬಿಟ್ಟದ್ದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಬಿಟ್ಟುಬಿಟ್ಟೆನೆಂದು ಕರ್ತನು ಹೇಳು ತ್ತಾನೆ ಅಂದನು.
12:6b.2CH.012.006 ಆದದರಿಂದ ಇಸ್ರಾಯೇಲಿನ ಪ್ರಧಾನರೂ ಅರಸನೂ ತಮ್ಮನ್ನು ತಗ್ಗಿಸಿಕೊಂಡುಕರ್ತನು ನೀತಿವಂತನು ಅಂದರು.
12:7b.2CH.012.007 ಅವರು ತಮ್ಮನ್ನು ತಗ್ಗಿಸಿ ಕೊಂಡದ್ದನ್ನು ಕರ್ತನು ನೋಡಿದಾಗ ಕರ್ತನ ವಾಕ್ಯವು ಶೆಮಾಯನಿಗೆ ಉಂಟಾಯಿತು. ಏನಂದರೆಅವರು ತಮ್ಮನ್ನು ತಗ್ಗಿಸಿಕೊಂಡದ್ದರಿಂದ ನಾನು ಅವ ರನ್ನು ನಾಶಮಾಡದೆ ಅವರು ಸ್ವಲ್ಪಮಟ್ಟಿಗೆ ತಪ್ಪಿಸಿ ಕೊಳ್ಳುವಂತೆ ಮಾಡುವೆನು. ಶೀಶಕನ ಕೈಯಿಂದ ನನ್ನ ಕೋಪವು ಯೆರೂಸಲೇಮಿನ ಮೇಲೆ ಹೊಯ್ಯಲ್ಪಡು ವದಿಲ್ಲ.
12:8b.2CH.012.008 ಆದಾಗ್ಯೂ ಅವರು ನನ್ನ ಸೇವೆಯನ್ನೂ ದೇಶಗಳ ಅರಸುಗಳ ಸೇವೆಯನ್ನೂ ತಿಳಿಯುವ ಹಾಗೆ ಅವನಿಗೆ ಸೇವಕರಾಗುವರು.
12:9b.2CH.012.009 ಹಾಗೆಯೇ ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರೋಧ ವಾಗಿ ಬಂದು ಕರ್ತನ ಮನೆಯ ಬೊಕ್ಕಸಗಳನ್ನೂ ಅರಸನ ಮನೆಯ ಬೊಕ್ಕಸಗಳನ್ನೂ ತೆಗೆದುಕೊಂಡನು; ಎಲ್ಲವನ್ನೂ ತೆಗೆದುಕೊಂಡನು. ಇದಲ್ಲದೆ ಸೊಲೊ ಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನು ತಕ್ಕೊಂಡು ಹೋದನು.
12:10b.2CH.012.010 ಇದಕ್ಕೆ ಬದಲಾಗಿ ಅರಸ ನಾದ ರೆಹಬ್ಬಾಮನು ತಾಮ್ರದ ಗುರಾಣಿಗಳನ್ನು ಮಾಡಿಸಿ ಅರಸನು ಮನೆಯ ಬಾಗಲನ್ನು ಕಾಯುವ ಕಾವಲಿನ ಅಧಿಪತಿಗಳ ಕೈಯಲ್ಲಿ ಅವುಗಳನ್ನು ಒಪ್ಪಿಸಿ ದನು.
12:11b.2CH.012.011 ಅರಸನು ಕರ್ತನ ಮನೆಯಲ್ಲಿ ಪ್ರವೇಶಿಸು ವಾಗ ಕಾವಲಿನವರು ಬಂದು ಅವುಗಳನ್ನು ತಕ್ಕೊಂಡು ಬಂದರು; ಕಾವಲಿನವರು ಚಾವಡಿಗೆ ಅವುಗಳನ್ನು ತಿರಿಗಿತಂದರು.
12:12b.2CH.012.012 ಅವನು ತನ್ನನ್ನು ತಗ್ಗಿಸಿಕೊಂಡಾಗ ಕರ್ತನ ಕೋಪವು ಅವನನ್ನು ಬಿಟ್ಟು ತಿರುಗಿತು; ಆತನು ಪೂರ್ಣವಾಗಿ ನಾಶಮಾಡಲು ಮನಸ್ಸಿಲ್ಲದೆ ಇದ್ದನು; ಯೆಹೂದದಲ್ಲಿ ಕಾರ್ಯಗಳು ಚೆನ್ನಾಗಿ ನಡೆದವು.
12:13b.2CH.012.013 ಅರಸನಾದ ರೆಹಬ್ಬಾಮನು ಯೆರೂಸಲೇಮಿನಲ್ಲಿ ತನ್ನನ್ನು ಬಲಪಡಿಸಿಕೊಂಡು ರಾಜ್ಯವನ್ನು ಆಳಿದನು. ರೆಹಬ್ಬಾಮನು ಆಳಲು ಆರಂಭಿಸಿದಾಗ ನಾಲ್ವತ್ತೊಂದು ವರುಷದವನಾಗಿದ್ದು ಅಲ್ಲಿ ತನ್ನ ನಾಮವನ್ನು ಇರಿಸಲು ಇಸ್ರಾಯೇಲಿನ ಸಮಸ್ತ ಗೋತ್ರಗಳಲ್ಲಿ ಕರ್ತನು ಆದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ಹದಿನೇಳು ವರುಷ ಆಳಿದನು. ಅವನ ತಾಯಿಯ ಹೆಸರು ನಯಮಾ; ಅವಳು ಅಮ್ಮೋನ್ಯಳಾಗಿದ್ದಳು.
12:14b.2CH.012.014 ಅವನು ಕರ್ತನನ್ನು ಹುಡುಕಲು ತನ್ನ ಹೃದಯ ವನ್ನು ಸಿದ್ಧಪಡಿಸದೆ ಇದ್ದದ್ದರಿಂದ ಕೆಟ್ಟದ್ದನ್ನು ಮಾಡಿ ದನು.
12:15b.2CH.012.015 ರೆಹಬ್ಬಾಮನ ಕ್ರಿಯೆಗಳು ಮೊದಲನೆಯವು ಗಳೂ ಕಡೆಯವುಗಳೂ ಪ್ರವಾದಿಯಾದ ಶೆಮಾಯನ ಪುಸ್ತಕದಲ್ಲಿಯೂ ವಂಶಾವಳಿಗಳನ್ನು ಕುರಿತು ಬರೆದ ದರ್ಶಿಯಾದ ಇದ್ದೋನ ಪುಸ್ತಕದಲ್ಲಿಯೂ ಬರೆಯ ಲ್ಪಟ್ಟವಲ್ಲವೇ? ಇದಲ್ಲದೆ ರೆಹಬ್ಬಾಮನಿಗೂ ಯಾರೊ ಬ್ಬಾಮನಿಗೂ ಯಾವಾಗಲೂ ಯುದ್ಧಉಂಟಾಗಿತ್ತು.ರೆಹಬ್ಬಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿ ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗ ನಾದ ಅಬೀಯನು ಅವನಿಗೆ ಬದಲಾಗಿ ಆಳಿದನು.
12:16b.2CH.012.016 ರೆಹಬ್ಬಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿ ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗ ನಾದ ಅಬೀಯನು ಅವನಿಗೆ ಬದಲಾಗಿ ಆಳಿದನು.
13
13:1b.2CH.013.001 ಅರಸನಾದ ಯಾರೊಬ್ಬಾಮನ ಹದಿನೆಂಟನೇ ವರುಷದಲ್ಲಿ ಅಬೀಯನು ಯೆಹೂದದ ಮೇಲೆ ಆಳಲು ಆರಂಭಿಸಿದನು.
13:2b.2CH.013.002 ಅವನು ಯೆರೂಸಲೇಮಿನಲ್ಲಿ ಮೂರು ವರುಷ ಆಳಿದನು. ಅವನ ತಾಯಿಯ ಹೆಸರು ವಿಾಕಾಯ, ಗಿಬೆಯದ ಊರೀಯೇಲನ ಮಗಳು.
13:3b.2CH.013.003 ಅಬೀಯ ನಿಗೂ ಯಾರೊಬ್ಬಾಮನಿಗೂ ಯುದ್ಧ ಉಂಟಾಗಿತ್ತು. ಆಗ ಅಬೀಯನು ಯುದ್ಧಸ್ಥರಾದ ಪರಾಕ್ರಮಶಾಲಿಗಳ ಸೈನ್ಯವನ್ನು ಯುದ್ಧಕ್ಕೆ ಸಿದ್ಧಮಾಡಿದನು. ಆಯಲ್ಪಟ್ಟ ನಾಲ್ಕು ಲಕ್ಷ ಜನರಿದ್ದರು. ಯಾರೊಬ್ಬಾಮನು ಅವನಿಗೆ ಎದುರಾಗಿ ಎಂಟು ಲಕ್ಷ ಮಂದಿ ಆಯಲ್ಪಟ್ಟ ಪರಾ ಕ್ರಮಶಾಲಿಗಳನ್ನು ಯುದ್ಧಕ್ಕೆ ನಿಲ್ಲಿಸಿದನು.
13:4b.2CH.013.004 ಆಗ ಅಬೀಯನು ಎಫ್ರಾಯಾಮ್ ಬೆಟ್ಟದಲ್ಲಿರುವ ಚೆಮಾರೈ ಎಂಬ ಬೆಟ್ಟದ ಮೇಲೆ ನಿಂತು--ಯಾರೊ ಬ್ಬಾಮನೇ, ಸಮಸ್ತ ಇಸ್ರಾಯೇಲೇ, ನನ್ನ ಮಾತು ಕೇಳಿರಿ.
13:5b.2CH.013.005 ಇಸ್ರಾಯೇಲಿನ ದೇವರಾದ ಕರ್ತನು ಇಸ್ರಾ ಯೇಲಿನ ಮೇಲೆ ರಾಜ್ಯವನ್ನು ಎಂದೆಂದಿಗೂ ದಾವೀ ದನಿಗೆ, ಅವನಿಗೂ ಅವನ ಮಕ್ಕಳಿಗೂ ಉಪ್ಪಿನ ಒಡಂಬಡಿಕೆಯಿಂದ ಕೊಟ್ಟನೆಂದು ನೀವು ತಿಳಿಯ ತಕ್ಕ ದ್ದಲ್ಲವೋ?
13:6b.2CH.013.006 ಆದರೆ ದಾವೀದನ ಮಗನಾದ ಸೊಲೊ ಮೋನನ ಸೇವಕನಾಗಿದ್ದ ನೆಬಾಟನ ಮಗನಾದ ಯಾರೋಬ್ಬಾಮನು ಎದ್ದು ತನ್ನ ಯಜಮಾನನ ಮೇ ತಿರುಗಿಬಿದ್ದಿದ್ದಾನೆ.
13:7b.2CH.013.007 ಇದಲ್ಲದೆ ನಿಷ್ಪ್ರಯೋಜಕರಾದ ಬೆಲಿಯಾಳನ ಮಕ್ಕಳು ಅವನ ಬಳಿಗೆ ಕೂಡಿ ಬಂದು ಸೊಲೊಮೋನನ ಮಗನಾದ ರೆಹಬ್ಬಾಮನು ಹುಡುಗ ನಾಗಿಯೂ ಮೃದು ಹೃದಯವುಳ್ಳವನಾಗಿಯೂ ಅವ ರನ್ನು ಎದುರಿಸಲು ಬಲವಿಲ್ಲದೆ ಇರುವಾಗ ಅವ ನಿಗೆ ವಿರೋಧವಾಗಿ ತಮ್ಮನ್ನು ಬಲಪಡಿಸಿಕೊಂಡಿ ದ್ದಾರೆ.
13:8b.2CH.013.008 ಈಗ ದಾವೀದನ ಕುಮಾರರ ಕೈಯಲ್ಲಿರುವ ಕರ್ತನ ರಾಜ್ಯವನ್ನು ಎದುರಿಸುತ್ತೇವೆಂದು ನೀವು ಹೇಳಿ ಕೊಳ್ಳುತ್ತೀರಿ. ಇದಲ್ಲದೆ ನೀವು ಬಹು ಗುಂಪಾಗಿದ್ದೀರಿ. ಯಾರೋಬ್ಬಾಮನು ದೇವರುಗಳಾಗಿ ನಿಮಗೆ ಮಾಡಿದ ಬಂಗಾರದ ಕರುಗಳು ನಿಮ್ಮಲ್ಲಿ ಉಂಟು.
13:9b.2CH.013.009 ನೀವು ಆರೋನನ ಮಕ್ಕಳಾದ ಕರ್ತನ ಯಾಜಕರನ್ನೂ ಲೇವಿ ಯರನ್ನೂ ತಳ್ಳಿ ಹಾಕಿ ದೇಶಗಳ ಜನರ ಹಾಗೆ ನಿಮಗೆ ಯಾಜಕರನ್ನು ಮಾಡಲಿಲ್ಲವೋ? ಯಾವನಾದರೂ ಒಂದು ಎಳೇ ಹೋರಿಯನ್ನೂ ಏಳು ಟಗರುಗಳನ್ನೂ ತಕ್ಕೊಂಡು ಬಂದು ತನ್ನನ್ನು ಪ್ರತಿಷ್ಠೆಮಾಡಿದರೆ ಅವನು ದೇವರಲ್ಲದವುಗಳಿಗೆ ಯಾಜಕನಾಗಿರುವನು.
13:10b.2CH.013.010 ನಮಗಾದರೋ ಕರ್ತನು ನಮ್ಮ ದೇವರಾಗಿದ್ದಾನೆ; ನಾವು ಆತನನ್ನು ಬಿಡಲಿಲ್ಲ. ಇದಲ್ಲದೆ ಕರ್ತನಿಗೆ ಸೇವೆಮಾಡುವ ಯಾಜಕರು ಆರೋನನ ಮಕ್ಕಳು; ಲೇವಿಯರು ತಮ್ಮ ಕೆಲಸದಲ್ಲಿ ಇದ್ದಾರೆ.
13:11b.2CH.013.011 ಅವರು ಪ್ರತಿ ಉದಯದಲ್ಲಿಯೂ ಸಾಯಂಕಾಲದಲ್ಲಿಯೂ ಕರ್ತನಿಗೆ ದಹನಬಲಿಗಳನ್ನೂ ಸುಗಂಧ ಧೂಪವನ್ನೂ ಸುಡುತ್ತಾರೆ. ಇದಲ್ಲದೆ ಪರಿಶುದ್ಧ ಮೇಜಿನ ಮೇಲೆ ರೊಟ್ಟಿಗಳನ್ನು ಇಡುವದುಂಟು; ಪ್ರತಿ ಸಾಯಂಕಾಲ ದಲ್ಲಿ ಬಂಗಾರದ ದೀಪಸ್ಥಂಭವನ್ನೂ ಅದರ ದೀಪ ಗಳನ್ನೂ ಸಿದ್ಧಮಾಡಿ ಹಚ್ಚುತ್ತಾರೆ. ನಾವು ನಮ್ಮ ದೇವರಾದ ಕರ್ತನ ಕಟ್ಟಳೆಯನ್ನು ಕೈಕೊಳ್ಳುತ್ತೇವೆ; ಆದರೆ ನೀವು ಆತನನ್ನು ಬಿಟ್ಟಿದ್ದೀರಿ. ಇಗೋ, ದೇವರು ತಾನೇ ಅಧಿಪತಿಯಾಗಿ ನಮ್ಮ ಸಂಗಡ ಇದ್ದಾನೆ.
13:12b.2CH.013.012 ಇದಲ್ಲದೆ ನಿಮಗೆ ವಿರೋಧವಾಗಿ ಜಯಧ್ವನಿ ಮಾಡುವ ತುತೂರಿಗಳನ್ನು ಹಿಡುಕೊಂಡ ಆತನ ಯಾಜಕರು ಇದ್ದಾರೆ. ಇಸ್ರಾಯೇಲಿನ ಮಕ್ಕಳೇ, ನೀವು ನಿಮ್ಮ ಪಿತೃಗಳ ದೇವರಾದ ಕರ್ತನಿಗೆ ವಿರೋಧ ವಾಗಿ ಯುದ್ಧಮಾಡಬೇಡಿರಿ, ನೀವು ಜಯ ಹೊಂದು ವದಿಲ್ಲ ಅಂದನು.
13:13b.2CH.013.013 ಆದರೆ ಯಾರೊಬ್ಬಾಮನು ಅಡಗಿಕೊಂಡವರನ್ನು ಸುತ್ತಲೂ ಅವರ ಹಿಂದೆಯೂ ಬರಮಾಡಿದನು. ಆದದರಿಂದ ಅವರು ಯೆಹೂದ ದವರ ಮುಂದೆಯೂ ಅಡಗಿಕೊಂಡವರು ಅವರ ಹಿಂದೆಯೂ ಇದ್ದರು.
13:14b.2CH.013.014 ಯೆಹೂದದವರು ಹಿಂದಕ್ಕೆ ನೋಡಿದಾಗ ಇಗೋ, ಯುದ್ಧವು ಅವರ ಮುಂದೆಯೂ ಹಿಂದೆಯೂ ಇತ್ತು. ಆಗ ಅವರು ಕರ್ತನಿಗೆ ಕೂಗಿದರು, ಯಾಜಕರು ತುತೂರಿಗಳನ್ನು ಊದಿದರು.
13:15b.2CH.013.015 ಇದಲ್ಲದೆ ಯೆಹೂದದ ಮನುಷ್ಯರು ಆರ್ಭಟಿಸಿದರು; ಯೆಹೂದದ ಮನುಷ್ಯರು ಆರ್ಭಟಿ ಸಿದಾಗ ಏನಾಯಿತಂದರೆ, ದೇವರು ಅಬೀಯನ ಮತ್ತು ಯೆಹೂದದವರ ಮುಂದೆ ಯಾರೊಬ್ಬಾಮ ನನ್ನೂ ಸಮಸ್ತ ಇಸ್ರಾಯೇಲನ್ನೂ ಹೊಡೆದನು.
13:16b.2CH.013.016 ಇಸ್ರಾಯೇಲಿನ ಮಕ್ಕಳು ಯೆಹೂದದವರ ಎದುರಿ ನಿಂದ ಓಡಿಹೋದರು. ದೇವರು ಅವರನ್ನು ಅವರ ಕೈಯಲ್ಲಿ ಒಪ್ಪಿಸಿದನು.
13:17b.2CH.013.017 ಅಬೀಯನೂ ಅವನ ಜನರೂ ಅವರಲ್ಲಿ ಬಹಳ ಮಂದಿಯನ್ನು ಹತಮಾಡಿ ದರು. ಇಸ್ರಾಯೇಲಿನವರಲ್ಲಿ ಐದು ಲಕ್ಷ ಮಂದಿ ಆಯಲ್ಪಟ್ಟವರು ಹತವಾದರು.
13:18b.2CH.013.018 ಹೀಗೆ ಆ ಕಾಲದಲ್ಲಿ ಇಸ್ರಾಯೇಲಿನ ಮಕ್ಕಳು ತಗ್ಗಿಸಲ್ಪಟ್ಟರು. ಯೆಹೂದನ ಮಕ್ಕಳು ತಮ್ಮ ಪಿತೃಗಳ ದೇವರಾದ ಕರ್ತನ ಮೇಲೆ ಆತುಕೊಂಡಿದ್ದರಿಂದ ಜಯಹೊಂದಿದರು.
13:19b.2CH.013.019 ಅಬೀ ಯನು ಯಾರೊಬ್ಬಾಮನನ್ನು ಹಿಂದಟ್ಟಿ ಅವನಿಂದ ಬೇತೇಲ್, ಯೆಷಾನಾ, ಎಫ್ರೋನ್ ಎಂಬ ಪಟ್ಟಣ ಗಳನ್ನೂ ಅವುಗಳ ಗ್ರಾಮಗಳನ್ನೂ ತೆಗೆದುಕೊಂಡನು.
13:20b.2CH.013.020 ಯಾರೊಬ್ಬಾಮನು ಅಬೀಯನ ದಿನಗಳಲ್ಲಿ ತಿರಿಗಿ ಶಕ್ತಿಯನ್ನು ಹೊಂದಲಿಲ್ಲ. ಕರ್ತನು ಅವನನ್ನು ಹೊಡೆ ದದ್ದರಿಂದ ಅವನು ಸತ್ತನು.
13:21b.2CH.013.021 ಆದರೆ ಅಬೀಯನು ಬಲಗೊಂಡು ಹದಿನಾಲ್ಕು ಮಂದಿ ಹೆಂಡತಿಯರನ್ನು ಮದುವೆಮಾಡಿಕೊಂಡು ಇಪ್ಪತ್ತೆರಡು ಮಂದಿ ಕುಮಾರರನ್ನೂ ಹದಿನಾರು ಮಂದಿ ಕುಮಾರ್ತೆಯರನ್ನೂ ಪಡೆದನು.ಅಬೀ ಯನ ಮಿಕ್ಕಾದ ಕ್ರಿಯೆಗಳೂ ಅವನ ನಡತೆಗಳೂ ಮಾತುಗಳೂ ಪ್ರವಾದಿಯಾದ ಇದ್ದೋನನ ವರ್ತ ಮಾನಗಳಲ್ಲಿ ಬರೆಯಲ್ಪಟ್ಟಿವೆ.
13:22b.2CH.013.022 ಅಬೀ ಯನ ಮಿಕ್ಕಾದ ಕ್ರಿಯೆಗಳೂ ಅವನ ನಡತೆಗಳೂ ಮಾತುಗಳೂ ಪ್ರವಾದಿಯಾದ ಇದ್ದೋನನ ವರ್ತ ಮಾನಗಳಲ್ಲಿ ಬರೆಯಲ್ಪಟ್ಟಿವೆ.
14
14:1b.2CH.014.001 ಅಬೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನು ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗನಾದ ಆಸನು ಅವನಿಗೆ ಬದಲಾಗಿ ಆಳಿದನು. ಅವನ ದಿವಸಗಳಲ್ಲಿ ಹತ್ತು ವರುಷ ದೇಶವು ಶಾಂತವಾಗಿತ್ತು,
14:2b.2CH.014.002 ಆಸನು ತನ್ನ ದೇವರಾದ ಕರ್ತನ ದೃಷ್ಟಿಯಲ್ಲಿ ಒಳ್ಳೇದನ್ನೂ ಸರಿಯಾದದ್ದನ್ನೂ ಮಾಡಿದನು.
14:3b.2CH.014.003 ಅವನು ಅನ್ಯದೇವರು ಗಳ ಬಲಿಪೀಠಗಳನ್ನೂ ಉನ್ನತ ಸ್ಥಳಗಳನ್ನೂ ತೆಗೆದು ಹಾಕಿ ವಿಗ್ರಹಗಳನ್ನು ಒಡೆದುಬಿಟ್ಟು ಅವುಗಳ ತೋಪು ಗಳನ್ನು ಕಡಿದುಹಾಕಿ,
14:4b.2CH.014.004 ತಮ್ಮ ಪಿತೃಗಳ ದೇವರಾದ ಕರ್ತನನ್ನು ಹುಡುಕಲೂ ನ್ಯಾಯಪ್ರಮಾಣವನ್ನು ಆಜ್ಞೆಯನ್ನು ಕೈಕೊಳ್ಳಲೂ ಯೆಹೂದ್ಯರಿಗೆ ಆಜ್ಞಾಪಿ ಸಿದನು.
14:5b.2CH.014.005 ಇದಲ್ಲದೆ ಅವನು ಉನ್ನತ ಸ್ಥಳಗಳನ್ನೂ ವಿಗ್ರಹಗಳನ್ನೂ ಯೆಹೂದದ ಸಮಸ್ತ ಪಟ್ಟಣಗಳಿಂದ ತೆಗೆದುಹಾಕಿದನು. ರಾಜ್ಯವು ಅವನ ಮುಂದೆ ಶಾಂತ ವಾಗಿತ್ತು.
14:6b.2CH.014.006 ಇದಲ್ಲದೆ ಅವನು ಯೆಹೂದದಲ್ಲಿ ಕೋಟೆ ಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು. ದೇಶವು ಶಾಂತವಾ ಗಿತ್ತು. ಕರ್ತನು ಅವನಿಗೆ ವಿಶ್ರಾಂತಿ ಕೊಟ್ಟದ್ದರಿಂದ ಆ ವರುಷಗಳಲ್ಲಿ ಅವನಿಗೆ ಯುದ್ಧವಿರಲಿಲ್ಲ.
14:7b.2CH.014.007 ಅವನು ಯೆಹೂದದವರಿಗೆ--ದೇಶವು ನಮ್ಮ ಮುಂದೆ ಇರು ವಾಗ ಈ ಪಟ್ಟಣಗಳನ್ನು ಕಟ್ಟಿಸಿ ಅವುಗಳ ಸುತ್ತಲೂ ಗೋಡೆಗಳನ್ನೂ ಗೋಪುರಗಳನ್ನೂ ಬಾಗಲುಗಳನ್ನೂ ಅಗುಳಿಗಳನ್ನೂ ಮಾಡೋಣ; ಯಾಕಂದರೆ ನಾವು ನಮ್ಮ ದೇವರಾದ ಕರ್ತನನ್ನು ಹುಡುಕಿದೆವು; ನಾವು ಆತನನ್ನು ಹುಡುಕಿದ್ದರಿಂದ ಆತನು ಎಲ್ಲಾ ಕಡೆಯಲ್ಲಿ ನಮಗೆ ವಿಶ್ರಾಂತಿಯನ್ನು ಕೊಟ್ಟಿದ್ದಾನೆ ಅಂದನು.
14:8b.2CH.014.008 ಹಾಗೆಯೇ ಅವರು ಕಟ್ಟಿಸಿ ವೃದ್ಧಿಹೊಂದಿದರು. ಇದ ಲ್ಲದೆ ಆಸನಿಗೆ ಖೇಡ್ಯಗಳನ್ನೂ ಈಟಿಗಳನ್ನೂ ಹಿಡಿ ಯುವ ರಾಣುವೆ ಇತ್ತು. ಯೆಹೂದದವರು ಮೂರು ಲಕ್ಷಮಂದಿಯೂ ಬೆನ್ಯಾವಿಾನಿನವರು ಗುರಾಣಿಗಳನ್ನು ಹಿಡಿಯುವವರೂ, ಬಿಲ್ಲುಗಳನ್ನು ಎಸೆಯುವವರೂ ಎರಡು ಲಕ್ಷದ ಎಂಭತ್ತು ಸಾವಿರ ಮಂದಿಯೂ ಇದ್ದರು. ಇವರೆಲ್ಲರು ಪರಾಕ್ರಮಶಾಲಿಗಳಾಗಿದ್ದರು.
14:9b.2CH.014.009 ಆದರೆ ಕೂಷಿಯನಾದ ಜೆರಹನು ಅವರಿಗೆ ವಿರೋ ಧವಾಗಿ ಹೊರಟು ಮಾರೇಷದ ಮಟ್ಟಿಗೂ ಬಂದನು. ಅವನ ಸಂಗಡ ಹತ್ತು ಲಕ್ಷ ಜನ ರಾಣುವೆಯೂ ಮುನ್ನೂರು ರಥಗಳೂ ಇದ್ದವು.
14:10b.2CH.014.010 ಆಸನು ಅವನಿ ಗೆದುರಾಗಿ ಹೊರಟುಹೋದನು. ಮಾರೇಷದ ಬಳಿ ಯಲ್ಲಿ ಚೆಫಾತಾ ತಗ್ಗಿನಲ್ಲಿ ವ್ಯೂಹ ಕಟ್ಟಿದರು.
14:11b.2CH.014.011 ಆಗ ಆಸನು ತನ್ನ ದೇವರಾದ ಕರ್ತನನ್ನು ಕರೆದು--ಕರ್ತನೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯಕೊಡು ವವನು ನಮ್ಮ ದೇವರಾದ ಕರ್ತನೇ, ನಮಗೆ ಸಹಾಯ ಕೊಡು; ಯಾಕಂದರೆ ನಾವು ನಿನ್ನ ಮೇಲೆ ಆತುಕೊಂಡಿ ದ್ದೇವೆ; ನಿನ್ನ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ; ಓ ಕರ್ತನೇ, ನಿನ್ನ ಹೊರತು ಬೇರೆ ಯಾರೂ ಇಲ್ಲ, ನೀನೇ ನಮ್ಮ ದೇವರು; ಮನುಷ್ಯನು ನಿನ್ನೆದುರಿನಲ್ಲಿ ಬಲಗೊಳ್ಳದಿರಲಿ ಅಂದನು.
14:12b.2CH.014.012 ಆಗ ಕರ್ತನು ಕೂಷಿಯರನ್ನು ಆಸನ ಮುಂದೆಯೂ ಯೆಹೂ ದದವರ ಮುಂದೆಯೂ ಹೊಡೆದನು. ಆದದರಿಂದ ಕೂಷಿಯರು ಓಡಿಹೋದರು.
14:13b.2CH.014.013 ಆಗ ಆಸನೂ ಅವನ ಸಂಗಡ ಇದ್ದ ಜನರೂ ಅವರನ್ನು ಗೆರಾರಿನ ವರೆಗೂ ಹಿಂದಟ್ಟಿದರು. ಕೂಷಿಯರು ತಮಗೆ ತ್ರಾಣವಿಲ್ಲದ ಹಾಗೆ ಸೋತುಹೋದರು. ಅವರು ಕರ್ತನ ಮುಂದೆಯೂ ಆತನ ಸೈನ್ಯದ ಮುಂದೆಯೂ ನಾಶ ವಾದರು. ಯೆಹೂದದವರು ಬಹು ಕೊಳ್ಳೆಯನ್ನು ಒಯ್ದರು.
14:14b.2CH.014.014 ಅವರು ಗೆರಾರಿನ ಸುತ್ತಲಿರುವ ಸಮಸ್ತ ಪಟ್ಟಣಗಳನ್ನು ಹೊಡೆದರು. ಕರ್ತನ ಭಯವು ಅವರ ಮೇಲೆ ಬಂತು. ಆ ಪಟ್ಟಣಗಳಲ್ಲಿ ಬಹು ಕೊಳ್ಳೆ ಇದ್ದದ್ದರಿಂದ ಇವುಗಳನ್ನೆಲ್ಲಾ ಕೊಳ್ಳೆಮಾಡಿದರು.ಪಶುಗಳಿದ್ದ ಡೇರೆಗಳನ್ನು ಹೊಡೆದು ಕುರಿಗಳನ್ನೂ ಒಂಟೆಗಳನ್ನೂ ಬಹಳವಾಗಿ ತೆಗೆದುಕೊಂಡು ಯೆರೂ ಸಲೇಮಿಗೆ ತಿರುಗಿದರು.
14:15b.2CH.014.015 ಪಶುಗಳಿದ್ದ ಡೇರೆಗಳನ್ನು ಹೊಡೆದು ಕುರಿಗಳನ್ನೂ ಒಂಟೆಗಳನ್ನೂ ಬಹಳವಾಗಿ ತೆಗೆದುಕೊಂಡು ಯೆರೂ ಸಲೇಮಿಗೆ ತಿರುಗಿದರು.
15
15:1b.2CH.015.001 ಆಗ ದೇವರ ಆತ್ಮನು ಓದೇದನ ಮಗನಾದ ಅಜರ್ಯನ ಮೇಲೆ ಬಂದದ್ದರಿಂದ ಅವನು ಆಸನನ್ನು ಎದುರುಗೊಳ್ಳಲು ಹೊರಟುಬಂದು ಅವನಿಗೆ--
15:2b.2CH.015.002 ಆಸನೇ, ಯೆಹೂದ ಬೆನ್ಯಾವಿಾನನ ಸಮಸ್ತರೇ, ನನ್ನ ಮಾತನ್ನು ಕೇಳಿರಿ. ನೀವು ಕರ್ತನ ಸಂಗಡ ಇರುವ ವರೆಗೂ ಆತನು ನಿಮ್ಮ ಸಂಗಡ ಇರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು;
15:3b.2CH.015.003 ಆತನನ್ನು ಬಿಟ್ಟುಬಿಟ್ಟರೆ ಆತನು ನಿಮ್ಮನ್ನು ಬಿಟ್ಟುಬಿಡುವನು ಅಂದನು. ಬಹುಕಾಲ ಇಸ್ರಾಯೇಲ್ಯರು ನಿಜವಾದ ದೇವರಿಲ್ಲದೆ ಬೋಧಿಸುವ ಯಾಜಕನಿಲ್ಲದೆ ನ್ಯಾಯಪ್ರಮಾಣವಿಲ್ಲದೆ ಇದ್ದರು.
15:4b.2CH.015.004 ಆದರೆ ಅವರು ತಮ್ಮ ಇಕ್ಕಟ್ಟಿನಲ್ಲಿ ಇಸ್ರಾಯೇಲಿನ ದೇವರಾದ ಕರ್ತನ ಕಡೆಗೆ ತಿರಿಗಿ ಆತನನ್ನು ಹುಡುಕಿ ದಾಗ ಆತನು ಅವರಿಗೆ ಸಿಕ್ಕಿದನು.
15:5b.2CH.015.005 ಆ ಕಾಲಗಳಲ್ಲಿ ಹೊರಗೆ ಹೋಗುವವನಿಗೂ ಒಳಗೆ ಬರುವವನಿಗೂ ಸಮಾಧಾನವಿಲ್ಲದೆ ಇತ್ತು; ದೇಶದ ನಿವಾಸಿಗಳು ಬಹಳ ವಾಗಿ ಹೆದರಿದ್ದರು.
15:6b.2CH.015.006 ಜನಾಂಗವು ಜನಾಂಗದಿಂದಲೂ ಪಟ್ಟಣವು ಪಟ್ಟಣದಿಂದಲೂ ನಾಶವಾಯಿತು. ಯಾಕಂದರೆ ದೇವರು ಸಕಲ ಇಕ್ಕಟ್ಟುಗಳಿಂದ ಅವ ರನ್ನು ತೊಂದರೆಪಡಿಸಿದನು.
15:7b.2CH.015.007 ಆದದರಿಂದ ನೀವು ಬಲವಾಗಿರ್ರಿ; ನಿಮ್ಮ ಕೈಗಳು ಬಲಹೀನವಾಗದೆ ಇರಲಿ;ನಿಮ್ಮ ಕೆಲಸಕ್ಕೆ ಪ್ರತಿಫಲ ಸಿಕ್ಕುವದು ಅಂದನು.
15:8b.2CH.015.008 ಆಸನು ಈ ಮಾತುಗಳನ್ನೂ ಪ್ರವಾದಿಯಾದ ಓದೇದನ ಪ್ರವಾದನೆಯನ್ನೂ ಕೇಳಿದಾಗ ಅವನು ಬಲಗೊಂಡು ಯೆಹೂದ ಬೆನ್ಯಾವಿಾನನ ಸಮಸ್ತ ದೇಶದೊಳಗಿಂದಲೂ ಎಫ್ರಾಯಾಮಿನ ಬೆಟ್ಟದಲ್ಲಿ ತಾನು ಹಿಡಿದ ಪಟ್ಟಣಗಳೊಳಗಿಂದಲೂ ಅಸಹ್ಯ ವಿಗ್ರಹಗಳನ್ನು ತೆಗೆದುಹಾಕಿ ಕರ್ತನ ದ್ವಾರಾಂಗಳದ ಮುಂದೆ ಇದ್ದ ಕರ್ತನ ಬಲಿಪೀಠವನ್ನು ನೂತನ ಪಡಿಸಿದನು.
15:9b.2CH.015.009 ಇದಲ್ಲದೆ ಅವನು ಯೆಹೂದದ ಬೆನ್ಯಾ ವಿಾನನ ಸಮಸ್ತರನ್ನೂ ಎಫ್ರಾಯಾಮಿನಿಂದಲೂ ಮನಸ್ಸೆಯಿಂದಲೂ ಸಿಮೆಯೋನಿನಿಂದಲೂ ಅವರ ಕಡೆಗೆ ಬಂದ ಅನ್ಯರನ್ನೂ ಕೂಡಿಸಿದನು. ಅವನ ದೇವರಾದ ಕರ್ತನು ಅವನ ಸಂಗಡ ಇದ್ದಾನೆಂದು ಇವರು ಕಂಡು ಇಸ್ರಾಯೇಲಿನೊಳಗಿಂದ ಅನೇಕರು ಅವನ ಕಡೆಗೆ ಹೋದರು.
15:10b.2CH.015.010 ಹೀಗೆಯೇ ಆಸನ ಆಳಿಕೆಯ ಹದಿನೈದನೇ ವರುಷದ ಮೂರನೇ ತಿಂಗಳಲ್ಲಿ ಅವರು ಯೆರೂಸಲೇಮಿನಲ್ಲಿ ಕೂಡಿ ಕೊಂಡರು.
15:11b.2CH.015.011 ಅದೇ ಕಾಲದಲ್ಲಿ ತಾವು ತಂದ ಕೊಳ್ಳೆಯಿಂದ ಏಳುನೂರು ಎತ್ತುಗಳನ್ನೂ ಏಳು ಸಾವಿರ ಕುರಿಗಳನ್ನೂ ಕರ್ತನಿಗೆ ಬಲಿಅರ್ಪಿಸಿದರು.
15:12b.2CH.015.012 ತಮ್ಮ ಪಿತೃಗಳ ದೇವರಾದ ಕರ್ತನನ್ನು ತಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದ ಲೂ ಹುಡುಕಬೇಕೆಂದೂ
15:13b.2CH.015.013 ಯಾವನಾದರೂ ಇಸ್ರಾ ಯೇಲಿನ ದೇವರಾದ ಕರ್ತನನ್ನು ಹುಡುಕದೆ ಹೋದರೆ ಹಿರಿಯನಾದರೂ ಕಿರಿಯನಾದರೂ ಪುರುಷನಾದರೂ ಸ್ತ್ರೀಯಾದರೂ ಸಾಯಬೇಕೆಂದೂ ಒಡಂಬಡಿಕೆಯನ್ನು ಮಾಡಿಕೊಂಡರು.
15:14b.2CH.015.014 ಮಹಾಶಬ್ದದಿಂದಲೂ ಆರ್ಭಟ ದಿಂದಲೂ ತುತೂರಿಗಳ ಶಬ್ದದಿಂದಲೂ ಕೊಂಬು ಗಳ ಶಬ್ದದಿಂದಲೂ ಕರ್ತನ ಮುಂದೆ ಆಣೆಯಿಟ್ಟರು.
15:15b.2CH.015.015 ಇದಲ್ಲದೆ ಯೆಹೂದದವರೆಲ್ಲರೂ ಪ್ರಮಾಣಕ್ಕೆ ಸಂತೋಷಪಟ್ಟರು. ಅವರು ತಮ್ಮ ಪೂರ್ಣಹೃದಯ ದಿಂದ ಆಣೆ ಇಟ್ಟು ತಮ್ಮ ಪೂರ್ಣ ಇಷ್ಟದಿಂದ ಆತನನ್ನು ಹುಡುಕಲು ಆತನು ಅವರಿಗೆ ಸಿಕ್ಕಿದನು. ಕರ್ತನು ಸುತ್ತಲೂ ಅವರಿಗೆ ವಿಶ್ರಾಂತಿ ಕೊಟ್ಟನು.
15:16b.2CH.015.016 ಇದಲ್ಲದೆ ಅರಸನಾಗಿರುವ ಆಸನ ತಾಯಿಯಾದ ಮಾಕಳನ್ನು ಕುರಿತು ಏನಂದರೆ, ಅವಳು ಒಂದು ವಿಗ್ರಹವನ್ನು ಮಾಡಿಸಿ ತೋಪಿನಲ್ಲಿ ಇರಿಸಿದ್ದರಿಂದ ಅವಳನ್ನು ರಾಣಿಯಾಗಿರದ ಹಾಗೆ ತೆಗೆದುಹಾಕಿದನು. ಇದಲ್ಲದೆ ಆಸನು ಅವಳ ವಿಗ್ರಹವನ್ನು ಕಡಿದುಹಾಕಿ ಅದನ್ನು ತುಳಿದು ಕಿದ್ರೋನ್ ಹಳ್ಳದ ಬಳಿಯಲ್ಲಿ ಅದನ್ನು ಸುಟ್ಟುಬಿಟ್ಟನು.
15:17b.2CH.015.017 ಇಸ್ರಾಯೇಲಿನೊಳಗಿಂದ ಉನ್ನತ ಸ್ಥಳಗಳು ತೆಗೆದುಹಾಕಲ್ಪಡಲಿಲ್ಲ. ಆದರೂ ಆಸನ ಹೃದಯವು ತನ್ನ ಸಮಸ್ತ ದಿವಸಗಳಲ್ಲಿ ದೋಷ ವಿಲ್ಲದ್ದಾಗಿತ್ತು.
15:18b.2CH.015.018 ಅವನು ದೇವರ ಆಲಯದಲ್ಲಿ ತನ್ನ ತಂದೆಯೂ ತಾನೂ ಪರಿಶುದ್ಧ ಮಾಡಿದ ಬೆಳ್ಳಿಯನ್ನೂ ಬಂಗಾರವನ್ನೂ ಪಾತ್ರೆಗಳನ್ನೂ ಸೇರಿಸಿದನು.ಆಸನ ಆಳ್ವಿಕೆಯಲ್ಲಿ ಮೂವತ್ತೈದನೇ ವರುಷದ ಪರಿಯಂತರ ಯುದ್ಧವಿಲ್ಲದೆ ಇತ್ತು.
15:19b.2CH.015.019 ಆಸನ ಆಳ್ವಿಕೆಯಲ್ಲಿ ಮೂವತ್ತೈದನೇ ವರುಷದ ಪರಿಯಂತರ ಯುದ್ಧವಿಲ್ಲದೆ ಇತ್ತು.
16
16:1b.2CH.016.001 ಆಸನ ಆಳ್ವಿಕೆಯ ಮೂವತ್ತಾರನೇ ವರುಷದಲ್ಲಿ ಇಸ್ರಾಯೇಲಿನ ಅರಸನಾದ ಬಾಷನು ಯೆಹೂದಕ್ಕೆ ವಿರೋಧವಾಗಿ ಬಂದು ಯೆಹೂ ದದ ಅರಸನಾದ ಆಸನ ಬಳಿಗೆ ಯಾರೂ ಹೊರಟು ಹೋಗುವದಕ್ಕೂ ಒಳಗೆ ಬರುವದಕ್ಕೂ ಆಗದ ಹಾಗೆ ರಾಮವನ್ನು ಕಟ್ಟಿಸಿದನು.
16:2b.2CH.016.002 ಆಗ ಆಸನು ಕರ್ತನ ಆಲಯದ ಬೊಕ್ಕಸಗಳಿಂದಲೂ ಅರಸನ ಮನೆಯ ಬೊಕ್ಕಸದಿಂದಲೂ ಬೆಳ್ಳಿಬಂಗಾರವನ್ನು ತೆಗೆದುಕೊಂಡು ದಮಸ್ಕದಲ್ಲಿ ವಾಸವಾಗಿರುವ ಅರಾಮಿನ ಅರಸನಾದ ಬೆನ್ಹದದನ ಬಳಿಗೆ ಕಳುಹಿಸಿ ಅವನಿಗೆ--ನನ್ನ ತಂದೆಗೂ ನಿನ್ನ ತಂದೆಗೂ ಇದ್ದ ಹಾಗೆ ನನಗೂ ನಿನಗೂ ಒಡಂಬಡಿಕೆ ಉಂಟು.
16:3b.2CH.016.003 ಇಗೋ, ನಾನು ಬೆಳ್ಳಿಬಂಗಾರ ವನ್ನು ನಿನಗೆ ಕಳುಹಿಸಿದ್ದೇನೆ; ಇಸ್ರಾಯೇಲಿನ ಅರಸ ನಾದ ಬಾಷನು ನನ್ನನ್ನು ಬಿಟ್ಟುಹೋಗುವ ಹಾಗೆ ನೀನು ಹೋಗಿ ಅವನ ಸಂಗಡ ಮಾಡಿದ ಒಡಂಬಡಿ ಕೆಯನ್ನು ಮುರಿಯಬೇಕು ಎಂದು ಹೇಳಿದನು.
16:4b.2CH.016.004 ಬೆನ್ಹದ ದನು ಅರಸನಾದ ಆಸನ ಮಾತು ಕೇಳಿ ತನ್ನ ಸೈನ್ಯಾಧಿ ಪತಿಗಳನ್ನು ಇಸ್ರಾಯೇಲಿನ ಪಟ್ಟಣಗಳ ಮೇಲೆ ಕಳು ಹಿಸಿದನು. ಅವರು ಇಯ್ಯೋನನ್ನೂ ದಾನನನ್ನೂ ಅಬೇ ಲ್ಮಯಿಮ್‌ವನ್ನೂ ನಫ್ತಾಲಿಯನ್ನು ಸಮಸ್ತ ಉಗ್ರಾಣ ಗಳ ಪಟ್ಟಣಗಳನ್ನೂ ಸಂಹರಿಸಿದರು.
16:5b.2CH.016.005 ಬಾಷನು ಇದನ್ನು ಕೇಳಿದಾಗ ರಾಮವನ್ನು ಕಟ್ಟಿಸುವದನ್ನು ಬಿಟ್ಟು ತನ್ನ ಕೆಲಸವನ್ನು ನಿಲ್ಲಿಸಿಬಿಟ್ಟನು.
16:6b.2CH.016.006 ಆಗ ಅರಸನಾದ ಆಸನು ಯೆಹೂದದವರೆಲ್ಲರನ್ನು ಕರಕೊಂಡುಹೋದನು. ಬಾಷನು ಕಟ್ಟಿಸುತ್ತಿದ್ದ ರಾಮದ ಕಲ್ಲುಗಳನ್ನೂ ಅದರ ತೊಲೆಗಳನ್ನೂ ತಕ್ಕೊಂಡು ಹೋದರು; ಅವುಗಳಿಂದ ಗೆಬವನ್ನೂ ಮಿಚ್ಪೆಯನ್ನೂ ಕಟ್ಟಿಸಿದನು.
16:7b.2CH.016.007 ಅದೇ ಕಾಲದಲ್ಲಿ ಪ್ರವಾದಿಯಾದ ಹನಾನಿಯು ಯೆಹೂದದ ಅರಸನಾದ ಆಸನ ಬಳಿಗೆ ಬಂದು ಅವನಿಗೆ -- ನೀನು ನಿನ್ನ ದೇವರಾದ ಕರ್ತನ ಮೇಲೆ ಆತುಕೊಳ್ಳದೆ ಅರಾಮಿನ ಅರಸನ ಮೇಲೆ ಆತು ಕೊಂಡದ್ದರಿಂದ ಅರಾಮಿನ ಅರಸನ ಸೈನ್ಯವು ನಿನ್ನ ಕೈಯಿಂದ ತಪ್ಪಿಸಿಕೊಂಡಿತು.
16:8b.2CH.016.008 ಕೂಷಿಯರೂ ಲೂಬ್ಯರೂ ಮಹಾಸೈನ್ಯವಲ್ಲವೋ? ಅವರ ಸಂಗಡ ಅನೇಕ ರಥಗಳೂ ರಾಹುತರೂ ಇದ್ದರಲ್ಲವೇ? ಆಗ ನೀನು ಕರ್ತನ ಮೇಲೆ ಆತುಕೊಂಡದ್ದರಿಂದ ಆತನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿದ್ದನು.
16:9b.2CH.016.009 ಕರ್ತನ ಸಮ್ಮುಖದಲ್ಲಿ ಪೂರ್ಣ ಹೃದಯವುಳ್ಳವರ ನಿಮಿತ್ತ ಬಲವನ್ನು ತೋರಿಸುವದಕ್ಕೆ ಆತನ ಕಣ್ಣುಗಳು ಸಮಸ್ತ ಭೂಮಿಯಲ್ಲಿ ಓಡಾಡುತ್ತವೆ. ಈಗ ನೀನು ಬುದ್ಧಿ ಹೀನನಾಗಿ ನಡಕೊಂಡಿದ್ದೀ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಉಂಟಾಗಿರುವವು ಅಂದನು.
16:10b.2CH.016.010 ಆಗ ಆಸನು ಪ್ರವಾದಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಅವನ ಮಾತು ಗಳ ನಿಮಿತ್ತ ಅವನ ಮೆಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವ ರನ್ನು ಬಾಧಿಸಿದನು.
16:11b.2CH.016.011 ಇಗೋ, ಆಸನ ಕಾರ್ಯಗಳು ಮೊದಲನೆಯವುಗಳೂ ಕಡೆಯವುಗಳೂ ಯೆಹೂ ದದ ಇಸ್ರಾಯೇಲಿನ ಅರಸರ ಪುಸ್ತಕದಲ್ಲಿ ಬರೆದಿವೆ.
16:12b.2CH.016.012 ಆಸನು ತನ್ನ ಆಳ್ವಿಕೆಯ ಮೂವತ್ತೊಂಭತ್ತನೇ ವರುಷದಲ್ಲಿ ತನ್ನ ಕಾಲುಗಳಲ್ಲಿ ರೋಗವುಳ್ಳವನಾ ಗಿದ್ದನು. ಅವನ ರೋಗವು ಅತಿಘೋರವಾಯಿತು. ಅವನು ತನ್ನ ರೋಗದಲ್ಲಿ ಕರ್ತನನ್ನು ಹುಡುಕದೆ ವೈದ್ಯರನ್ನು ಹುಡುಕಿದನು.
16:13b.2CH.016.013 ಆಸನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ತನ್ನ ಆಳ್ವಿಕೆಯ ನಾಲ್ವತ್ತೊಂದನೇ ವರುಷದಲ್ಲಿ ಸತ್ತನು.ಅವನು ತನಗೋಸ್ಕರ ದಾವೀ ದನ ಪಟ್ಟಣದಲ್ಲಿ ಅಗಿಸಿದ ಅವನ ಸ್ವಂತ ಸಮಾಧಿಯಲ್ಲಿ ಅವನನ್ನು ಹೂಣಿಟ್ಟರು. ಅವರು ತೈಲಗಾರರ ವಿದ್ಯೆ ಯಿಂದ ಸಿದ್ಧಮಾಡಿದ ಸುಗಂಧಗಳಿಂದಲೂ ನಾನಾ ವಿಧವಾದ ಪದಾರ್ಥಗಳಿಂದಲೂ ತುಂಬಲ್ಪಟ್ಟ ಹಾಸಿ ಗೆಯ ಮೇಲೆ ಅವನನ್ನು ಮಲಗಿಸಿ ಅವನಿಗೋಸ್ಕರ ಬಹಳ ಹೆಚ್ಚಾಗಿ (ಧೂಪವನ್ನು) ಸುಟ್ಟರು.
16:14b.2CH.016.014 ಅವನು ತನಗೋಸ್ಕರ ದಾವೀ ದನ ಪಟ್ಟಣದಲ್ಲಿ ಅಗಿಸಿದ ಅವನ ಸ್ವಂತ ಸಮಾಧಿಯಲ್ಲಿ ಅವನನ್ನು ಹೂಣಿಟ್ಟರು. ಅವರು ತೈಲಗಾರರ ವಿದ್ಯೆ ಯಿಂದ ಸಿದ್ಧಮಾಡಿದ ಸುಗಂಧಗಳಿಂದಲೂ ನಾನಾ ವಿಧವಾದ ಪದಾರ್ಥಗಳಿಂದಲೂ ತುಂಬಲ್ಪಟ್ಟ ಹಾಸಿ ಗೆಯ ಮೇಲೆ ಅವನನ್ನು ಮಲಗಿಸಿ ಅವನಿಗೋಸ್ಕರ ಬಹಳ ಹೆಚ್ಚಾಗಿ (ಧೂಪವನ್ನು) ಸುಟ್ಟರು.
17
17:1b.2CH.017.001 ಅವನ ಮಗನಾದ ಯೆಹೋಷಾಫಾಟನು ಅವನಿಗೆ ಬದಲಾಗಿ ಆಳಿದನು;
17:2b.2CH.017.002 ಅವನು ಇಸ್ರಾಯೇಲಿಗೆ ವಿರೋಧವಾಗಿ ತನ್ನನ್ನು ಬಲಪಡಿಸಿ ಕೊಂಡನು. ಇದಲ್ಲದೆ ಅವನು ಯೆಹೂದದಲ್ಲಿ ಸಮಸ್ತ ಕೋಟೆಯುಳ್ಳ ಪಟ್ಟಣಗಳಲ್ಲಿ ಸೈನ್ಯವನ್ನು ಇಟ್ಟು ಯೆಹೂ ದದಲ್ಲಿಟ್ಟ ಹಾಗೆ ತನ್ನ ತಂದೆಯಾದ ಆಸನು ತೆಗೆದು ಕೊಂಡ ಎಫ್ರಾಯಾಮಿನ ಪಟ್ಟಣಗಳಲ್ಲಿ ಸೈನ್ಯಗಳನ್ನು ಇಟ್ಟನು.
17:3b.2CH.017.003 ಯೆಹೋಷಾಫಾಟನು ಬಾಳೀಮ್ ನನ್ನು ಹುಡುಕದೆ ತನ್ನ ತಂದೆಯಾದ ದಾವೀದನ ಮೊದಲಿನ ಮಾರ್ಗಗಳಲ್ಲಿ ನಡೆದದ್ದರಿಂದ ಕರ್ತನು ಅವನ ಸಂಗಡ ಇದ್ದನು.
17:4b.2CH.017.004 ತನ್ನ ತಂದೆಯ ದೇವರನ್ನು ಹುಡುಕಿ ಇಸ್ರಾಯೇಲಿನ ಕ್ರಿಯೆಗಳ ಪ್ರಕಾರ ನಡೆಯದೆ ಆತನ ಆಜ್ಞೆಗಳಲ್ಲಿ ನಡೆದನು.
17:5b.2CH.017.005 ಆದದರಿಂದ ಕರ್ತನು ರಾಜ್ಯವನ್ನು ಅವನ ಕೈಯಲ್ಲಿ ಸ್ಥಿರಪಡಿಸಿದನು. ಯೆಹೂದ ವೆಲ್ಲವೂ ಯೆಹೋಷಾಫಾಟನಿಗೆ ಕಾಣಿಕೆಯನ್ನು ಕೊಟ್ಟ ದ್ದರಿಂದ ಅವನಿಗೆ ಐಶ್ವರ್ಯವೂ ಘನತೆಯೂ ಅಧಿಕ ವಾಗಿ ದೊರಕಿತು.
17:6b.2CH.017.006 ಅವನ ಹೃದಯವು ಕರ್ತನ ಮಾರ್ಗಗಳಲ್ಲಿ ಎತ್ತಲ್ಪಟ್ಟಿತು. ಇದಲ್ಲದೆ ಅವನು ಯೆಹೂ ದದಲ್ಲಿದ್ದ ಉನ್ನತ ಸ್ಥಳಗಳನ್ನೂ ತೋಪುಗಳನ್ನೂ ತೆಗೆದು ಹಾಕಿದನು.
17:7b.2CH.017.007 ಇದಲ್ಲದೆ ಅವನ ಆಳ್ವಿಕೆಯ ಮೂರನೇ ವರುಷ ದಲ್ಲಿ ಅವನು ತನ್ನ ಪ್ರಧಾನರಾದ ಬೆನ್ಹೈಲನನ್ನೂ ಓಬದ್ಯನನ್ನೂ ಜೆಕರ್ಯನನ್ನೂ ನೆತನೇಲನನ್ನೂ ವಿಾಕಾ ಯನನ್ನೂ ಯೆಹೂದದ ಪಟ್ಟಣಗಳಲ್ಲಿ ಬೋಧಿಸಲು ಕರೇಕಳುಹಿಸಿದನು.
17:8b.2CH.017.008 ಅವರ ಸಂಗಡ ಲೇವಿಯರಾದ ಶೆಮಾಯನನ್ನೂ ನೆತನ್ಯನನ್ನೂ ಜೆಬದ್ಯನನ್ನೂ ಅಸಾ ಹೇಲನನ್ನೂ ಶೆವಿಾರಾಮೋತನನ್ನೂ ಯೆಹೋನಾತಾ ನನ್ನೂ ಅದೋನೀಯನನ್ನೂ ಟೋಬೀಯನನ್ನೂ ಟೋಬದೋನಿಯನನ್ನೂ ಇವರ ಸಂಗಡ ಯಾಜಕ ರಾದ ಎಲೀಷಾಮನನ್ನೂ ಯೆಹೋರಾಮನನ್ನೂ ಕಳು ಹಿಸಿದನು.
17:9b.2CH.017.009 ಇವರು ಯೆಹೂದದಲ್ಲಿ ಬೋಧಿಸಿದರು. ಅವರ ಬಳಿಯಲ್ಲಿ ಕರ್ತನ ನ್ಯಾಯಪ್ರಮಾಣದ ಪುಸ್ತಕ ಇತ್ತು; ಯೆಹೂದದ ಸಮಸ್ತ ಪಟ್ಟಣಗಳನ್ನು ಸಂಚರಿಸಿ ಜನರಿಗೆ ಬೋಧಿಸಿದರು.
17:10b.2CH.017.010 ಕರ್ತನ ಭಯವು ಯೆಹೂದದ ಸುತ್ತಲಿರುವ ದೇಶಗಳ ಸಮಸ್ತ ರಾಜ್ಯಗಳ ಮೇಲೆ ಇದ್ದದ್ದರಿಂದ ಅವರು ಯೆಹೋಷಾಫಾಟನ ಮೇಲೆ ಯುದ್ಧಮಾಡ ಲಿಲ್ಲ.
17:11b.2CH.017.011 ಇದಲ್ಲದೆ ಫಿಲಿಷ್ಟಿಯರಲ್ಲಿ ಕೆಲವರು ಯೆಹೋ ಷಾಫಾಟನಿಗೆ ಕಾಣಿಕೆಗಳನ್ನೂ ಕಪ್ಪದ ಹಣವನ್ನೂ ತಂದರು, ಅರಬ್ಬಿ ದೇಶದವರು ತಮ್ಮ ಮಂದೆಗಳಿಂದ ಏಳು ಸಾವಿರದ ಏಳು ನೂರು ಟಗರುಗಳನ್ನೂ ಏಳು ಸಾವಿರದ ಏಳು ನೂರು ಹೋತಗಳನ್ನೂ ತಂದರು.
17:12b.2CH.017.012 ಹೀಗೆ ಯೆಹೋಷಾಫಾಟನು ಬರಬರುತ್ತಾ ಬಹಳ ದೊಡ್ಡವನಾಗಿ ಯೆಹೂದದಲ್ಲಿ ಕೋಟೆ ಉಗ್ರಾಣದ ಪಟ್ಟಣಗಳನ್ನೂ ಕಟ್ಟಿಸಿದನು.
17:13b.2CH.017.013 ಇದಲ್ಲದೆ ಯೆಹೂದದ ಪಟ್ಟಣಗಳಲ್ಲಿ ಬಹಳ ಕೆಲಸಗಳನ್ನು ನಡಿಸುತ್ತಾ ಇದ್ದನು. ಪರಾಕ್ರಮಶಾಲಿಗಳಾದ ಯುದ್ಧದ ಮನುಷ್ಯರು ಯೆರೂ ಸಲೇಮಿನಲ್ಲಿದ್ದರು.
17:14b.2CH.017.014 ತಮ್ಮ ಪಿತೃಗಳ ಮನೆಯ ಪ್ರಕಾರ ವಾಗಿರುವ ಅವರ ಲೆಕ್ಕವೇನಂದರೆ, ಯೆಹೂದದ ಸಹಸ್ರಗಳ ಅಧಿಪತಿಗಳಲ್ಲಿ ಅದ್ನನು ಮುಖ್ಯಸ್ಥನಾಗಿ ದ್ದನು; ಅವನ ಸಂಗಡ ಪರಾಕ್ರಮಶಾಲಿಗಳು ಮೂರು ಲಕ್ಷಮಂದಿ ಇದ್ದರು.
17:15b.2CH.017.015 ಅವನ ತರುವಾಯ ಅಧಿಪತಿ ಯಾದ ಯೆಹೋಹಾನಾನನು; ಅವನ ಸಂಗಡ ಎರಡು ಲಕ್ಷದ ಎಂಭತ್ತು ಸಾವಿರ ಮಂದಿಯು.
17:16b.2CH.017.016 ಇವನ ತರುವಾಯ ಕರ್ತನಿಗೆ ತನ್ನನ್ನು ಮನಃಪೂರ್ವಕವಾಗಿ ಒಪ್ಪಿಸಿದ ಜಿಕ್ರಿಯ ಮಗನಾದ ಅಮಸ್ಯನು; ಅವನ ಸಂಗಡ ಎರಡು ಲಕ್ಷಮಂದಿ ಪರಾಕ್ರಮಶಾಲಿಗಳು.
17:17b.2CH.017.017 ಬೆನ್ಯಾವಿಾನ್ಯರಲ್ಲಿ ಪರಾಕ್ರಮಶಾಲಿಯಾದ ಎಲ್ಯಾದ ವನು; ಅವನ ಸಂಗಡ ಬಿಲ್ಲನ್ನೂ ಗುರಾಣಿಯನ್ನೂ ಧರಿಸಿಕೊಂಡಿರುವ ಎರಡು ಲಕ್ಷ ಮಂದಿಯು.
17:18b.2CH.017.018 ಇವನ ತರುವಾಯ ಯೆಹೋಜಾಬಾದನು; ಅವನ ಸಂಗಡ ಯುದ್ಧಕ್ಕೆ ಸಿದ್ಧವಾಗಿರುವ ಲಕ್ಷದ ಎಂಭತ್ತು ಸಾವಿರ ಮಂದಿಯು.ಅರಸನಿಂದ ಸಮಸ್ತ ಯೆಹೂದ ದಲ್ಲಿರುವ ಕೋಟೆಯುಳ್ಳ ಪಟ್ಟಣಗಳಲ್ಲಿ ಇರಿಸಲ್ಪಟ್ಟ ವರ ಹೊರತಾಗಿ ಇವರು ಅರಸನ ಬಳಿಯಲ್ಲಿ ಕಾಯುತ್ತಿದ್ದರು.
17:19b.2CH.017.019 ಅರಸನಿಂದ ಸಮಸ್ತ ಯೆಹೂದ ದಲ್ಲಿರುವ ಕೋಟೆಯುಳ್ಳ ಪಟ್ಟಣಗಳಲ್ಲಿ ಇರಿಸಲ್ಪಟ್ಟ ವರ ಹೊರತಾಗಿ ಇವರು ಅರಸನ ಬಳಿಯಲ್ಲಿ ಕಾಯುತ್ತಿದ್ದರು.
18
18:1b.2CH.018.001 ಯೆಹೋಷಾಫಾಟನಿಗೆ ಐಶ್ವರ್ಯವೂ ಘನತೆಯೂ ಅಧಿಕವಾಗಿರುವಾಗ ಅವನು ಅಹಾಬನ ಸಂಗಡ ಬಂಧುತ್ವ ಮಾಡಿದನು.
18:2b.2CH.018.002 ಕೆಲವು ವರುಷಗಳ ತರುವಾಯ ಅವನು ಅಹಾಬನ ಬಳಿಗೆ ಸಮಾರ್ಯಕ್ಕೆ ಹೋದನು; ಆಗ ಅಹಾಬನು ಅವನಿಗೋಸ್ಕರವೂ ಅವನ ಸಂಗಡ ಇದ್ದ ಜನರಿಗೋ ಸ್ಕರವೂ ಅನೇಕ ಕುರಿದನಗಳನ್ನು ಕೊಯಿಸಿ ತನ್ನ ಸಂಗಡ ಗಿಲ್ಯಾದಿನಲ್ಲಿರುವ ರಾಮೋತಿಗೆ ಹೋಗಲು ಪ್ರೇರೇಪಿಸಿದನು.
18:3b.2CH.018.003 ಇಸ್ರಾಯೇಲಿನ ಅರಸನಾದ ಅಹಾ ಬನು ಯೆಹೂದದ ಅರಸನಾದ ಯೆಹೋಷಾಫಾಟ ನಿಗೆ--ಗಿಲ್ಯಾದಿನಲ್ಲಿರುವ ರಾಮೋತಿಗೆ ನೀನು ನನ್ನ ಸಂಗಡ ಬರುತ್ತೀಯೋ ಅಂದನು. ಅದಕ್ಕವನು--ನಾನು ನಿನ್ನ ಹಾಗೆಯೂ ನನ್ನ ಜನರು ನಿನ್ನ ಜನರ ಹಾಗೆಯೂ ಯುದ್ಧದಲ್ಲಿ ನಿನ್ನ ಸಂಗಡ ಇರು ವೆವು ಅಂದನು.
18:4b.2CH.018.004 ಆದರೆ ಯೆಹೋಷಾಫಾಟನು ಇಸ್ರಾಯೇಲಿನ ಅರಸನಿಗೆ--ದಯಮಾಡಿ ಈ ಹೊತ್ತು ಕರ್ತನ ವಾಕ್ಯವನ್ನು ವಿಚಾರಿಸು ಅಂದನು.
18:5b.2CH.018.005 ಆಗ ಇಸ್ರಾಯೇಲಿನ ಅರಸನು ನಾನೂರು ಮಂದಿ ಪ್ರವಾದಿ ಗಳನ್ನು ಕೂಡಿಸಿ ಅವರಿಗೆ--ನಾವು ಗಿಲ್ಯಾದಿನಲ್ಲಿರುವ ರಾಮೋತಿಗೆ ಯುದ್ಧಕ್ಕೆ ಹೋಗಬಹುದೋ ಬಾರದೋ ಅಂದನು. ಅದಕ್ಕವರು--ಹೋಗು; ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.
18:6b.2CH.018.006 ಆದರೆ ಯೆಹೋಷಾಫಾಟನು--ಇವರ ಹೊರತಾಗಿ ನಾವು ವಿಚಾರಿಸುವ ಹಾಗೆ ಇಲ್ಲಿ ಕರ್ತನ ಪ್ರವಾದಿಯು ಯಾವನೂ ಇಲ್ಲವೋ ಅಂದನು.
18:7b.2CH.018.007 ಆಗ ಇಸ್ರಾಯೇ ಲಿನ ಅರಸನು ಯೊಹೋಷಾಫಾಟನಿಗೆ -- ನಾವು ಕರ್ತನಿಂದ ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬವನು ಇನ್ನೊಬ್ಬನಿದ್ದಾನೆ. ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಅವನು ನನ್ನನ್ನು ಕುರಿತು ಒಳ್ಳೆಯದನ್ನಲ್ಲ; ಕೆಟ್ಟದ್ದನ್ನೇ, ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಅನ್ನದಿರಲಿ ಅಂದನು.
18:8b.2CH.018.008 ಇಸ್ರಾಯೇಲಿನ ಅರ ಸನು ಒಬ್ಬ ಅಧಿಕಾರಿಯನ್ನು ಕರೆದು ಇಮ್ಲನ ಮಗ ನಾದ ವಿಾಕಾಯೆಹುವನ್ನು ಶೀಘ್ರವಾಗಿ ಕರಕೊಂಡು ಬಾ ಅಂದನು.
18:9b.2CH.018.009 ಆದರೆ ಇಸ್ರಾಯೇಲಿನ ಅರಸನೂ ಯೆಹೂದದ ಅರಸನಾದ ಯೆಹೋಷಾಫಾಟನೂ ವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯದ ಬಾಗಲಿನ ಮುಂದೆ ಬೈಲಿನಲ್ಲಿ ತಮ್ಮ ತಮ್ಮ ಸಿಂಹಾಸನಗಳ ಮೇಲೆ ಕುಳಿತಿದ್ದರು. ಸಕಲ ಪ್ರವಾದಿಗಳೂ ಅವರ ಮುಂದೆ ಪ್ರವಾದಿಸಿದರು.
18:10b.2CH.018.010 ಆಗ ಕೆನಾನನ ಮಗನಾದ ಚಿದ್ಕೀ ಯನು ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು --ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವ ವರೆಗೂ ಇರಿದು ಹಾಕುವಿ ಎಂದು ಕರ್ತನು ಹೇಳುತ್ತಾನೆ ಅಂದನು.
18:11b.2CH.018.011 ಸಮಸ್ತ ಪ್ರವಾದಿಗಳೂ ಹಾಗೆಯೇ ಪ್ರವಾದಿಸಿ--ಗಿಲ್ಯಾದಿನಲ್ಲಿರುವ ರಾಮೋ ತಿಗೆ ಹೋಗಿ ಜಯಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.
18:12b.2CH.018.012 ಆದರೆ ವಿಾಕಾಯೆಹುವನ್ನು ಕರೆಯುವದಕ್ಕೆ ಹೋದ ಸೇವಕನು ಅವನಿಗೆ--ಇಗೋ, ಪ್ರವಾದಿಗಳ ಮಾತುಗಳು ಒಂದೇ ಒಪ್ಪಿಗೆಯಿಂದ ಅರಸನಿಗೆ ಒಳ್ಳೇ ದನ್ನು ಪ್ರಕಟಿಸುತ್ತವೆ; ನಿನ್ನ ಮಾತು ಅವರಲ್ಲಿ ಒಬ್ಬನ ಮಾತಿನ ಹಾಗೆಯೇ ಇರಲಿ; ಒಳ್ಳೇ ಮಾತು ಆಡು ಅಂದನು.
18:13b.2CH.018.013 ಅದಕ್ಕೆ ಮಿಕಾಯೆಹುವು--ಕರ್ತನ ಜೀವ ದಾಣೆ, ನನ್ನ ದೇವರು ಏನು ಹೇಳುವನೋ ಅದನ್ನು ಹೇಳುವೆನು ಅಂದನು.
18:14b.2CH.018.014 ಅವನು ಅರಸನ ಬಳಿಗೆ ಬಂದಾಗ ಅರಸನು ಅವನಿಗೆ--ವಿಾಕಾಯೆಹುವೇ, ನಾವು ರಾಮೋತ್ ಗಿಲ್ಯಾದಿಗೆ ಯುದ್ಧಕ್ಕೆ ಹೋಗಲೋ ಇಲ್ಲವೆ ನಾವು ಹೋಗುವದು ಬೇಡವೋ? ಅಂದನು. ಆಗ ಅವನು--ಹೋಗಿ ಜಯಹೊಂದಿರಿ, ಅವರು ನಿಮ್ಮ ಕೈಯಲ್ಲಿ ಒಪ್ಪಿಸಲ್ಪಡುವರು ಅಂದನು.
18:15b.2CH.018.015 ಆಗ ಅರಸನು ಅವನಿಗೆ--ನೀನು ಕರ್ತನ ಹೆಸರಿನಲ್ಲಿ ಸತ್ಯ ವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟುಸಾರಿ ನಿನಗೆ ಆಣೆ ಇಡಬೇಕು ಅಂದನು.
18:16b.2CH.018.016 ಅದ ಕ್ಕವನು--ಕಾಯುವವನಿಲ್ಲದ ಕುರಿಗಳ ಹಾಗೆ ಬೆಟ್ಟಗಳ ಮೇಲೆ ಚದರಿಸಲ್ಪಟ್ಟ ಸಮಸ್ತ ಇಸ್ರಾಯೇಲ್ಯರನ್ನು ಕಂಡೆನು. ಆಗ ಕರ್ತನು--ಇವರಿಗೆ ಯಜಮಾನನು ಇಲ್ಲ; ಪ್ರತಿ ಮನುಷ್ಯನು ತನ್ನ ಮನೆಗೆ ಸಮಾಧಾನ ವಾಗಿ ತಿರುಗಲಿ ಅಂದನು.
18:17b.2CH.018.017 ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ--ಇವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನೇ ಪ್ರವಾದಿಸುವನೆಂದು ನಾನು ನಿನಗೆ ಹೇಳಲಿಲ್ಲವೇ ಅಂದನು.
18:18b.2CH.018.018 ಅದಕ್ಕೆ ವಿಾಕಾಯೆಹುವು ಹೇಳಿದ್ದೇನಂದರೆ--ಕರ್ತನ ವಾಕ್ಯ ವನ್ನು ಕೇಳು. ಕರ್ತನು ತನ್ನ ಸಿಂಹಾಸನದ ಮೇಲೆ ಕುಳಿತಿರುವದನ್ನೂ ಆಕಾಶದ ಸಮಸ್ತ ಸೈನ್ಯವು ಆತನ ಬಲಪಾರ್ಶ್ವದಲ್ಲಿಯೂ ಎಡಪಾರ್ಶ್ವದಲ್ಲಿಯೂ ನಿಂತಿರು ವದನ್ನೂ ನಾನು ಕಂಡೆನು.
18:19b.2CH.018.019 ಆಗ ಕರ್ತನು--ಇಸ್ರಾ ಯೇಲಿನ ಅರಸನಾದ ಅಹಾಬನು ಹೋಗಿ ರಾಮೋತ್ ಗಿಲ್ಯಾದಿನಲ್ಲಿ ಬೀಳುವ ಹಾಗೆ ಅವನನ್ನು ಮರುಳು ಗೊಳಿಸುವವನು ಯಾರು ಅಂದನು.
18:20b.2CH.018.020 ಒಬ್ಬನು ಹೀಗೆಯೂ ಮತ್ತೊಬ್ಬನು ಹಾಗೆಯೂ ಹೇಳುತ್ತಿರುವಾಗ ಒಂದು ಆತ್ಮ ಹೊರಟು ಬಂದು ಕರ್ತನ ಮುಂದೆ ನಿಂತು -- ನಾನು ಅವನನ್ನು ಮರುಳುಗೊಳಿಸುತ್ತೇನೆ ಅಂದಿತು.
18:21b.2CH.018.021 ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದು--ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಲ್ಲಿ ಸುಳ್ಳು ಆತ್ಮವಾಗಿರುವೆನು ಅಂದಿತು. ಅದಕ್ಕೆ ಆತನು--ನೀನು ಅವನನ್ನು ಮರುಳು ಗೊಳಿಸುವಿ, ಮತ್ತು ಜಯಿಸುವಿ; ಹೊರಟುಹೋಗಿ ಹಾಗೆ ಮಾಡು ಅಂದನು.
18:22b.2CH.018.022 ಆದದರಿಂದ ಇಗೋ, ಕರ್ತನು ಈ ಸಮಸ್ತವಾದ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮವನ್ನು ಇಟ್ಟಿದ್ದಾನೆ. ಕರ್ತನು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾನೆ ಅಂದನು.
18:23b.2CH.018.023 ಆಗ ಕೆನಾನನ ಕುಮಾರನಾದ ಚಿದ್ಕೀಯನು ಸವಿಾಪಕ್ಕೆ ಬಂದು ವಿಾಕಾಯೆಹುವಿನ ಕೆನ್ನೆಯ ಮೇಲೆ ಹೊಡೆದು ಕರ್ತನ ಆತ್ಮವು ನನ್ನನ್ನು ಬಿಟ್ಟು ನಿನ್ನ ಸಂಗಡ ಮಾತಾನಾಡಲು ಯಾವ ಮಾರ್ಗವಾಗಿ ಬಂತು ಅಂದನು. ಅದಕ್ಕೆ ವಿಾಕಾಯೆಹುವು--
18:24b.2CH.018.024 ಇಗೋ, ನಿನ್ನನ್ನು ಬಚ್ಚಿಟ್ಟುಕೊಳ್ಳಲು ಒಳಕೊಠಡಿಗೆ ಹೋಗುವ ದಿವಸದಲ್ಲಿ ನೋಡುವಿ ಅಂದನು.
18:25b.2CH.018.025 ಆಗ ಇಸ್ರಾಯೇ ಲಿನ ಅರಸನು--ನೀವು ವಿಾಕಾಯೆಹುವನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ ಅರಸನ ಮಗನಾದ ಯೋವಾಷನ ಬಳಿಗೂ ಅವನನ್ನು ಹಿಂದಕ್ಕೆ ಒಯ್ದು ಹೀಗೆ ಹೇಳಿರಿ--
18:26b.2CH.018.026 ಅರಸನು ಹೇಳು ವದೇನಂದರೆ--ನೀವು ಇವನನ್ನು ಸೆರೆಮನೆಯಲ್ಲಿಟ್ಟು ನಾನು ಸಮಾಧಾನವಾಗಿ ಬರುವ ಮಟ್ಟಿಗೂ ಅವನಿಗೆ ಬಾಧೆಯ ರೊಟ್ಟಿಯನ್ನೂ ಬಾಧೆಯ ನೀರನ್ನೂ ತಿನ್ನಲು ಕೊಡಿರಿ ಅಂದನು.
18:27b.2CH.018.027 ಅದಕ್ಕೆ ವಿಾಕಾಯೆಹುವುನೀನು ಸಮಾಧಾನದಿಂದ ಬಂದೇ ಬರುವದಾದರೆ ಕರ್ತನು ನನ್ನ ಮುಖಾಂತರ ಮಾತನಾಡಲಿಲ್ಲ ಎಂದು ಹೇಳಿ--ಜನರೇ, ನೀವೆಲ್ಲರು ಕೇಳಿರಿ ಅಂದನು.
18:28b.2CH.018.028 ಹೀಗೆಯೇ ಇಸ್ರಾಯೇಲಿನ ಅರಸನೂ ಯೆಹೂ ದದ ಅರಸನಾದ ಯೆಹೋಷಾಫಾಟನೂ ರಾಮೋತ್ ಗಿಲ್ಯಾದಿಗೆ ಹೋದರು.
18:29b.2CH.018.029 ಆಗ ಇಸ್ರಾಯೇಲಿನ ಅರ ಸನು ಯೆಹೋಷಾಫಾಟನಿಗೆ--ನಾನು ನನ್ನನ್ನು ಮರೆ ಮಾಜಿ ಯುದ್ಧದಲ್ಲಿ ಪ್ರವೇಶಿಸುವೆನು; ಆದರೆ ನೀನು ನಿನ್ನ ವಸ್ತ್ರಗಳನ್ನು ಧರಿಸಿಕೊಂಡಿರು ಅಂದನು. ಹಾಗೆಯೇ ಇಸ್ರಾಯೇಲಿನ ಅರಸನು ತನ್ನನ್ನು ಮರೆಮಾಜಿದನು; ಅವರು ಯುದ್ಧಕ್ಕೆ ಹೋದರು.
18:30b.2CH.018.030 ಆದರೆ ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳವರಿಗೆನೀವು ಹಿರಿಕಿರಿಯರ ಸಂಗಡ ಯುದ್ಧಮಾಡದೆ ಇಸ್ರಾ ಯೇಲಿನ ಅರಸನ ಸಂಗಡವೇ ಯುದ್ಧಮಾಡಿರಿ ಎಂದು ಆಜ್ಞಾಪಿಸಿದ್ದನು.
18:31b.2CH.018.031 ಆದದರಿಂದ ರಥಗಳ ಅಧಿಪತಿ ಗಳು ಯೆಹೋಷಾಫಾಟನನ್ನು ನೋಡಿದಾಗ--ನಿಶ್ಚ ಯವಾಗಿ ಇವನೇ ಇಸ್ರಾಯೇಲಿನ ಅರಸನೆಂದು ಹೇಳಿ ಅವನ ಸಂಗಡ ಯುದ್ಧಮಾಡುವದಕ್ಕೆ ಸುತ್ತಿಕೊಂಡರು. ಯೆಹೋಷಾಫಾಟನು ಕೂಗಿಕೊಳ್ಳಲು ಕರ್ತನು ಅವ ನಿಗೆ ಸಹಾಯಕೊಟ್ಟನು. ಇದಲ್ಲದೆ ದೇವರು ಅವರನ್ನು ಅವನ ಕಡೆಯಿಂದ ತೊಲಗಿಸಿದನು.
18:32b.2CH.018.032 ಅವನು ಇಸ್ರಾ ಯೇಲಿನ ಅರಸನಲ್ಲವೆಂದು ರಥಗಳ ಅಧಿಪತಿಗಳು ನೋಡಿ ಅವನನ್ನು ಬಿಟ್ಟು ತಿರುಗಿಕೊಂಡರು.
18:33b.2CH.018.033 ಆದರೆ ಒಬ್ಬನು ಗುರಿಯಿಡದೆ ಬಿಲ್ಲಿಗೆ ಬಾಣ ವನ್ನೇರಿಸಿ ಇಸ್ರಾಯೇಲಿನ ಅರಸನನ್ನು ಕವಚದ ಸಂದು ಗಳಲ್ಲಿ ಹೊಡೆದನು. ಆದದರಿಂದ ಅವನು ತನ್ನ ಸಾರಥಿಗೆ--ನೀನು ನಿನ್ನ ಕೈಯನ್ನು ತಿರುಗಿಸಿ ನನ್ನನ್ನು ಸೈನ್ಯದೊಳಗಿಂದ ಆಚೇಕಡೆ ತೆಗೆದುಕೊಂಡು ಹೋಗು; ನಾನು ಗಾಯಪಟ್ಟಿದ್ದೇನೆ ಅಂದನು.ಆ ದಿನ ಯುದ್ಧ ಪ್ರಬಲವಾದದರಿಂದ ಇಸ್ರಾಯೇಲಿನ ಅರ ಸನು ಸಾಯಂಕಾಲದ ವರೆಗೂ ಅರಾಮ್ಯರಿಗೆ ಎದುರಾಗಿ ರಥದಲ್ಲೇ ಆತುಕೊಂಡಿದ್ದು ಸೂರ್ಯನು ಅಸ್ತಮಿಸಿ ದಾಗ ಸತ್ತನು.
18:34b.2CH.018.034 ಆ ದಿನ ಯುದ್ಧ ಪ್ರಬಲವಾದದರಿಂದ ಇಸ್ರಾಯೇಲಿನ ಅರ ಸನು ಸಾಯಂಕಾಲದ ವರೆಗೂ ಅರಾಮ್ಯರಿಗೆ ಎದುರಾಗಿ ರಥದಲ್ಲೇ ಆತುಕೊಂಡಿದ್ದು ಸೂರ್ಯನು ಅಸ್ತಮಿಸಿ ದಾಗ ಸತ್ತನು.
19
19:1b.2CH.019.001 ಆದರೆ ಯೆಹೂದದ ಅರಸನಾದ ಯೆಹೋಷಾಫಾಟನು ಸಮಾಧಾನವಾಗಿ ಯೆರೂಸಲೇಮಿನಲ್ಲಿರುವ ತನ್ನ ಮನೆಗೆ ತಿರಿಗಿ ಬಂದನು.
19:2b.2CH.019.002 ಆಗ ಪ್ರವಾದಿಯಾಗಿರುವ ಹನಾನೀಯ ಮಗನಾದ ಯೇಹೂ ಅವನನ್ನು ಎದುರುಗೊಳ್ಳಲು ಹೋದನು. ಅರಸನಾದ ಯೆಹೋಷಾಫಾಟನಿಗೆ ಅವನು--ದುಷ್ಟ ನಿಗೆ ಸಹಾಯ ಕೊಡುವವನಾಗಿ ಕರ್ತನನ್ನು ಹಗೆ ಮಾಡುವವರನ್ನು ಪ್ರೀತಿಮಾಡಬಹುದೋ? ಆದ ಕಾರಣ ನಿನ್ನ ಮೇಲೆ ಕರ್ತನ ಸನ್ನಿಧಿಯಿಂದ ರೌದ್ರ ಉಂಟು.
19:3b.2CH.019.003 ಆದಾಗ್ಯೂ ನೀನು ದೇಶದಿಂದ ತೋಪು ಗಳನ್ನು ತೆಗೆದುಹಾಕಿ ದೇವರನ್ನು ಹುಡುಕಲು ನಿನ್ನ ಹೃದಯವನ್ನು ಸಿದ್ಧಪಡಿಸಿದ್ದರಿಂದ ನಿನ್ನಲ್ಲಿ ಉತ್ತಮವಾದ ಕಾರ್ಯಗಳು ಕಾಣಲ್ಪಟ್ಟಿವೆ ಅಂದನು.
19:4b.2CH.019.004 ಯೆಹೋಷಾಫಾಟನು ಯೆರೂಸಲೇಮಿನಲ್ಲಿ ವಾಸ ವಾಗಿದ್ದನು. ಅವನು ತಿರಿಗಿ ಹೊರಟು ಬೇರ್ಷೆಬ ಮೊದಲುಗೊಂಡು ಎಫ್ರಾಯಾಮಿನ ಬೆಟ್ಟದ ಮಟ್ಟಿಗೂ ಜನರಲ್ಲಿ ಸಂಚರಿಸಿ ತಮ್ಮ ಪಿತೃಗಳ ದೇವ ರಾದ ಕರ್ತನ ಕಡೆಗೆ ಅವರನ್ನು ತಿರುಗಿಸಿ
19:5b.2CH.019.005 ಪಟ್ಟಣ ದಿಂದ ಪಟ್ಟಣಕ್ಕೆ ದೇಶದ ಕೋಟೆಯ ಪಟ್ಟಣಗಳ ಲ್ಲೆಲ್ಲಾ ಅವನು ನ್ಯಾಯಾಧಿಪತಿಗಳನ್ನು ನೇಮಿಸಿದನು.
19:6b.2CH.019.006 ನ್ಯಾಯಾಧಿಪತಿಗಳಿಗೆ -- ನೀವು ಮಾಡುವದನ್ನು ನೋಡಿಕೊಳ್ಳಿರಿ; ನೀವು ಮನುಷ್ಯರಿಗೋಸ್ಕರವಲ್ಲ, ನ್ಯಾಯತೀರಿಸುವ ಕಾರ್ಯದಲ್ಲಿ ನಿಮ್ಮ ಸಂಗಡ ಇರುವ ಕರ್ತನಿಗೋಸ್ಕರ ನ್ಯಾಯತೀರಿಸುತ್ತೀರಿ.
19:7b.2CH.019.007 ಆದಕಾರಣ ಕರ್ತನ ಭಯವು ನಿಮ್ಮ ಮೇಲೆ ಇರಲಿ. ನೀವು ಜಾಗ್ರತೆಯಾಗಿದ್ದು ನಡಿಸಿರಿ. ನಮ್ಮ ಕರ್ತನಾದ ದೇವರ ಬಳಿಯಲ್ಲಿ ಅನ್ಯಾಯವಾದರೂ ಮುಖದಾಕ್ಷಿಣ್ಯ ವಾದರೂ ಲಂಚ ತೆಗೆದುಕೊಳ್ಳುವದಾದರೂ ಇಲ್ಲ ಅಂದನು.
19:8b.2CH.019.008 ಇದಲ್ಲದೆ ಅವರು ಯೆರೂಸಲೇಮಿಗೆ ತಿರಿಗಿ ಬಂದ ತರುವಾಯ ಯೆಹೋಷಾಫಾಟನು ಕರ್ತನ ನ್ಯಾಯತೀರ್ವಿಕೆಗೋಸ್ಕರವೂ ವ್ಯಾಜ್ಯಗಳಿಗೋ ಸ್ಕರವೂ ಯೆರೂಸಲೇಮಿನೊಳಗೆ ಲೇವಿಯರಲ್ಲಿಯೂ ಯಾಜಕರಲ್ಲಿಯೂ ಪಿತೃಗಳ ಮುಖ್ಯಸ್ಥರಲ್ಲಿಯೂ ಕೆಲ ವರನ್ನು ನೇಮಿಸಿ ಅವರಿಗೆ--
19:9b.2CH.019.009 ನೀವು ಈ ಕಾರ್ಯವನ್ನು ಕರ್ತನ ಭಯದಿಂದಲೂ ನಂಬಿಕೆಯಿಂದಲೂ ಪೂರ್ಣ ಹೃದಯದಿಂದಲೂ ಮಾಡಬೇಕು.
19:10b.2CH.019.010 ಇದಲ್ಲದೆ ರಕ್ತ ರಕ್ತಕ್ಕೂ ನ್ಯಾಯಕ್ಕೂ ಆಜ್ಞೆಗೂ ನಿಯಮಗಳಿಗೂ ನ್ಯಾಯ ತೀರ್ವಿಕೆಗಳಿಗೂ ತಮ್ಮ ಪಟ್ಟಣಗಳಲ್ಲಿ ವಾಸವಾಗಿರುವ ನಿಮ್ಮ ಸಹೋದರರಿಂದ ಯಾವ ಕಾರ್ಯವಾದರೂ ನಿಮ್ಮ ಮುಂದೆ ಬಂದರೆ ರೌದ್ರವು ನಿಮ್ಮ ಮೇಲೆಯೂ ನಿಮ್ಮ ಸಹೋದರರ ಮೇಲೆಯೂ ಬಾರದ ಹಾಗೆ ಕರ್ತನಿಗೆ ವಿರೋಧವಾಗಿ ಅಪರಾಧಮಾಡದಂತೆ ನೀವು ಅವರನ್ನು ಎಚ್ಚರಿಸಬೇಕು. ಇದನ್ನು ಮಾಡಿರಿ, ಆಗ ನೀವು ಅಪರಾಧವಿಲ್ಲದವರಾಗಿರುವಿರಿ.ಇಗೋ, ಪ್ರಧಾನ ಯಾಜಕನಾದ ಅಮರ್ಯನು ಕರ್ತನ ಸಮಸ್ತ ಕಾರ್ಯಗಳಲ್ಲಿಯೂ ಯೆಹೂದದ ಮನೆಯ ನಾಯಕ ನಾಗಿರುವ ಇಷ್ಮಾಯೇಲನ ಮಗನಾದ ಜೆಬದ್ಯನು ಅರಸನ ಸಮಸ್ತ ಕಾರ್ಯಗಳಲ್ಲಿಯೂ ಇದ್ದಾರೆ. ಇದ ಲ್ಲದೆ ಲೇವಿಯರೂ ನಿಮ್ಮ ಮುಂದೆ ಅಧಿಕಾರಿಗಳಾಗಿ ರುವರು. ನೀವು ಬಲಗೊಂಡು ಕೆಲಸ ನಡಿಸಿರಿ; ಕರ್ತನು ಒಳ್ಳೆಯವರ ಸಂಗಡ ಇರುವನು ಅಂದನು.
19:11b.2CH.019.011 ಇಗೋ, ಪ್ರಧಾನ ಯಾಜಕನಾದ ಅಮರ್ಯನು ಕರ್ತನ ಸಮಸ್ತ ಕಾರ್ಯಗಳಲ್ಲಿಯೂ ಯೆಹೂದದ ಮನೆಯ ನಾಯಕ ನಾಗಿರುವ ಇಷ್ಮಾಯೇಲನ ಮಗನಾದ ಜೆಬದ್ಯನು ಅರಸನ ಸಮಸ್ತ ಕಾರ್ಯಗಳಲ್ಲಿಯೂ ಇದ್ದಾರೆ. ಇದ ಲ್ಲದೆ ಲೇವಿಯರೂ ನಿಮ್ಮ ಮುಂದೆ ಅಧಿಕಾರಿಗಳಾಗಿ ರುವರು. ನೀವು ಬಲಗೊಂಡು ಕೆಲಸ ನಡಿಸಿರಿ; ಕರ್ತನು ಒಳ್ಳೆಯವರ ಸಂಗಡ ಇರುವನು ಅಂದನು.
20
20:1b.2CH.020.001 ಇದರ ತರುವಾಯ ಏನಾಯಿತಂದರೆ, ಮೋವಾಬಿನ ಮಕ್ಕಳೂ ಅಮ್ಮೋನಿನ ಮಕ್ಕಳೂ ಅಮ್ಮೋನ್ಯರ ಕೊಡ ಇತರರೂ ಯೆಹೋ ಷಾಫಾಟನ ಮೇಲೆ ಯುದ್ಧಮಾಡಲು ಬಂದರು.
20:2b.2CH.020.002 ಆಗ ಕೆಲವರು ಬಂದು ಯೆಹೋಷಾಫಾಟನಿಗೆ--ಸಮು ದ್ರದ ಆಚೆಯಿಂದ ನಿನಗೆ ವಿರೋಧವಾಗಿ ಅರಾಮಿನ ಬಹುಗುಂಪು ಈ ಕಡೆ ಬರುತ್ತದೆ; ಇಗೋ, ಅವರು ಏಂಗೆದಿ ಎಂಬ ಹಚೆಚೋನ್ ತಾಮಾರಿನಲ್ಲಿ ಇದ್ದಾ ರೆಂದು ತಿಳಿಸಿದರು.
20:3b.2CH.020.003 ಆಗ ಯೆಹೋಷಾಫಾಟನು ಭಯಪಟ್ಟು ಕರ್ತನನ್ನು ಹುಡುಕಲು ನಿರ್ಣಯಿಸಿ ಕೊಂಡು ಸಮಸ್ತ ಯೆಹೂದದಲ್ಲಿ ಉಪವಾಸಮಾಡ ಬೇಕೆಂದು ಸಾರಿಸಿದನು.
20:4b.2CH.020.004 ಆದದರಿಂದ ಯೆಹೂದ ದವರು ಕರ್ತನನ್ನು ಹುಡುಕಲು ಕೂಡಿಕೊಂಡರು. ನಿಶ್ಚಯವಾಗಿ ಸಮಸ್ತ ಯೆಹೂದದ ಪಟ್ಟಣಗಳಿಂದ ಕರ್ತನನ್ನು ಹುಡುಕಲು ಬಂದರು.
20:5b.2CH.020.005 ಆಗ ಯೆಹೋಷಾ ಫಾಟನು ಹೊಸ ಅಂಗಳದ ಮುಂದೆ ಕರ್ತನ ಮಂದಿರ ದಲ್ಲಿರುವ ಯೆಹೂದದ ಯೆರೂಸಲೇಮಿನ ಸಭೆಯ ಮಧ್ಯದಲ್ಲಿ ನಿಂತು--ನಮ್ಮ ಪಿತೃಗಳ ದೇವರಾದ
20:6b.2CH.020.006 ಓ ಕರ್ತನೇ, ಪರಲೋಕದಲ್ಲಿರುವ ದೇವರು ನೀನಲ್ಲವೋ? ನೀನು ಜನಾಂಗಗಳ ಸಕಲ ರಾಜ್ಯಗಳ ಮೇಲೆ ಆಳುತ್ತೀಯಲ್ಲವೋ? ಯಾವನೂ ನಿನ್ನನ್ನು ಎದುರಿಸಕೂಡದ ಹಾಗೆ ನಿನ್ನ ಕೈಯಲ್ಲಿ ಶಕ್ತಿಯೂ ಪರಾಕ್ರಮವೂ ಇಲ್ಲವೋ?
20:7b.2CH.020.007 ನೀನು ನಿನ್ನ ಜನವಾದ ಇಸ್ರಾಯೇಲಿನ ಎದುರಿನಿಂದ ಈ ದೇಶದ ನಿವಾಸಿಗ ಳನ್ನು ಓಡಿಸಿಬಿಟ್ಟು ಅದನ್ನು ನಿನ್ನ ಸ್ನೇಹಿತನಾದ ಅಬ್ರ ಹಾಮನ ಸಂತತಿಗೆ ಎಂದೆಂದಿಗೂ ಕೊಟ್ಟ ನೀನು ನಮ್ಮ ದೇವರಲ್ಲವೋ?
20:8b.2CH.020.008 ಅವರು ಅದರಲ್ಲಿ ನಿವಾಸ ಮಾಡಿ ನಿನ್ನ ಹೆಸರಿಗೆ ಪರಿಶುದ್ಧವಾದ ಸ್ಥಾನವನ್ನು ಕಟ್ಟಿಸಿ
20:9b.2CH.020.009 ನಿನ್ನ ಹೆಸರು ಈ ಆಲಯದಲ್ಲಿರುವದರಿಂದ ಕತ್ತಿಯೂ ನ್ಯಾಯತೀರಿಸುವ ಶಿಕ್ಷೆಯೂ ಜಾಡ್ಯವೂ ಬರವೂ ಏನಾದರೂ ನಮ್ಮ ಮೇಲೆ ಬಂದರೆ ನಾವು ಈ ಆಲಯದ ಮುಂದೆಯೂ ನಿನ್ನ ಸಮ್ಮುಖದಲ್ಲಿಯೂ ನಿಂತು ನಮ್ಮ ಇಕ್ಕಟ್ಟಿನಲ್ಲಿ ನಿನ್ನನ್ನು ಕೂಗುವಾಗ ನೀನು ಕೇಳಿ ರಕ್ಷಿಸುವವನಾಗಿದ್ದೀ ಎಂದು ಹೇಳಿದರು.
20:10b.2CH.020.010 ಈಗ ಇಗೋ, ಅಮ್ಮೋನ್ ಮೋವಾಬ್, ಸೇಯಾರ್ ಬೆಟ್ಟದ ಮಕ್ಕಳನ್ನು ನೋಡು; ಇಸ್ರಾಯೇಲ್ಯರು ಐಗುಪ್ತದೇಶ ದೊಳಗಿಂದ ಹೊರಟು ಬರುವಾಗ ಅವರ ಕಡೆಗೆ ಹೋಗಲು ನೀನು ಇವರಿಗೆ ಅಪ್ಪಣೆಕೊಡದೆ ಇದ್ದದ ರಿಂದ ಇವರು ತೊಲಗಿ ಅವರನ್ನು ನಾಶಮಾಡದೆ ಹೋದರು.
20:11b.2CH.020.011 ಇಗೋ, ನಮಗೆ ನೀನು ಸ್ವಾಧೀನ ಮಾಡಿಕೊಳ್ಳಲು ಕೊಟ್ಟ ನಿನ್ನ ಸ್ವಾಸ್ಥ್ಯದೊಳಗಿಂದ ಅವರು ಬಂದು ನಮ್ಮನ್ನು ಹೊರಡಿಸಬೇಕೆಂದು ನಮಗೆ ಪ್ರತೀಕಾರ ಮಾಡುತ್ತಾರೆ.
20:12b.2CH.020.012 ಓ ನಮ್ಮ ದೇವರೇ, ನೀನು ಅವರಿಗೆ ನ್ಯಾಯತೀರಿಸುವದಿಲ್ಲವೋ? ನಮಗೆ ವಿರೋಧವಾಗಿ ಬರುವ ಈ ಮಹಾಗುಂಪನ್ನು ಎದು ರಿಸಲು ನಮಗೆ ಶಕ್ತಿ ಇಲ್ಲ. ನಾವು ಏನು ಮಾಡಬೇಕೋ ತಿಳಿಯಲಿಲ್ಲ. ಆದರೆ ನಮ್ಮ ಕಣ್ಣುಗಳು ನಿನ್ನ ಮೇಲೆ ಅವೆ ಅಂದರು.
20:13b.2CH.020.013 ಹೀಗೆಯೇ ಯೆಹೂದದವರೆಲ್ಲರು ತಮ್ಮ ಹೆಂಡತಿಯರು, ಮಕ್ಕಳು, ಚಿಕ್ಕವರು ಸಹಿತವಾಗಿ ಕರ್ತನ ಮುಂದೆ ನಿಂತರು.
20:14b.2CH.020.014 ಆಗ ಸಭೆಯ ಮಧ್ಯದಲ್ಲಿ ಆಸಾಫನ ಮಕ್ಕಳಲ್ಲಿ ಒಬ್ಬನಾದಂಥ, ಲೇವಿಯನಾದಂಥ, ಮತ್ತನ್ಯನ ಮಗ ನಾದ ಯೆಗೀಯೇಲನ ಮಗನಾದ ಬೆನಾಯನ ಮಗ ನಾದ ಜೆಕರೀಯನ ಮಗನಾದ ಯಹಜೀಯೇಲನ ಮೇಲೆ ಕರ್ತನ ಆತ್ಮನು ಬಂದನು.
20:15b.2CH.020.015 ಆಗ ಅವನುಯೆಹೂದದ ಸಮಸ್ತರೇ, ಯೆರೂಸಲೇಮಿನ ನಿವಾಸಿ ಗಳೇ, ಅರಸನಾದ ಯೆಹೋಷಾಫಾಟನೇ, ಕೇಳಿರಿ. ಕರ್ತನು ನಿಮಗೆ ಹೀಗೆ ಹೇಳುತ್ತಾನೆ--ಈ ಮಹಾಗುಂಪಿನ ನಿಮಿತ್ತ ನೀವು ಭಯಪಡಬೇಡಿರಿ, ಹೆದರ ಬೇಡಿರಿ. ಯಾಕಂದರೆ ಯುದ್ಧವು ನಿಮ್ಮದಲ್ಲ, ದೇವ ರದೇ.
20:16b.2CH.020.016 ಮಾರನೇ ದಿವಸ ನೀವು ಅವರಿಗೆ ಎದು ರಾಗಿ ಹೋಗಿರಿ. ಇಗೋ, ಅವರು ಹಚ್ಚೀಚು ಎಂಬ ಕಣಿವೆಯಿಂದ ಬರುತ್ತಾರೆ; ಯೆರೂವೇಲಿನ ಅರಣ್ಯದ ಮುಂಭಾಗದಲ್ಲಿರುವ ಹಳ್ಳದ ಅಂತ್ಯದಲ್ಲಿ ಅವರನ್ನು ಕಂಡುಕೊಳ್ಳುವಿರಿ.
20:17b.2CH.020.017 ಇದರಲ್ಲಿ ನೀವು ಯುದ್ಧ ಮಾಡಲು ಅವಶ್ಯವಿಲ್ಲ; ನೀವು ನೆಲೆಯಾಗಿ ನಿಂತು ಕೊಂಡು ಕರ್ತನು ನಿಮಗೆ ಮಾಡುವ ರಕ್ಷಣೆಯನ್ನು ನೋಡಿರಿ; ಯೆಹೂದದವರೇ, ಯೆರೂಸಲೇಮಿನ ವರೇ, ಭಯಪಡಬೇಡಿರಿ, ಹೆದರಬೇಡಿರಿ; ಮಾರನೇ ದಿವಸ ಅವರೆದುರಿಗೆ ಹೊರಟು ಹೋಗಿರಿ; ಕರ್ತನು ನಿಮ್ಮ ಸಂಗಡ ಇದ್ದಾನೆ ಅಂದನು.
20:18b.2CH.020.018 ಆಗ ಯೆಹೋ ಷಾಫಾಟನು ತನ್ನ ಮುಖವನ್ನು ನೆಲಕ್ಕೆ ಬಾಗಿಸಿದನು; ಯೆಹೂದದವರೆಲ್ಲರೂ ಯೆರೂಸಲೇಮಿನ ನಿವಾಸಿಗಳೆ ಲ್ಲರೂ ಕರ್ತನ ಮುಂದೆ ಅಡ್ಡಬಿದ್ದು ಕರ್ತನನ್ನು ಆರಾ ಧಿಸಿದರು.
20:19b.2CH.020.019 ಇದಲ್ಲದೆ ಕೆಹಾತ್ಯರ ಮಕ್ಕಳಲ್ಲಿಯೂ ಕೋರಹಿಯರ ಮಕ್ಕಳಲ್ಲಿಯೂ ಇರುವ ಲೇವಿಯರು ಗಟ್ಟಿಯಾಗಿ ದೊಡ್ಡ ಶಬ್ದದಿಂದ ಇಸ್ರಾಯೇಲಿನ ದೇವ ರಾದ ಕರ್ತನನ್ನು ಸ್ತುತಿಸಲು ಎದ್ದು ನಿಂತರು.
20:20b.2CH.020.020 ಅವರು ಉದಯದಲ್ಲಿ ಎದ್ದು ತೆಕೋವದ ಅರ ಣ್ಯಕ್ಕೆ ಹೊರಟರು. ಅವರು ಹೊರಟು ಹೋಗುತ್ತಿ ರುವಾಗ ಯೆಹೋಷಾಫಾಟನು ನಿಂತುಕೊಂಡು--ಓ ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಕರ್ತನನ್ನು ನಂಬಿಕೊಳ್ಳಿರಿ, ಸ್ಥಿರವಾಗಿರ್ರಿ; ಆತನ ಪ್ರವಾದಿಗಳನ್ನು ನಂಬಿಕೊಳ್ಳಿರಿ; ಆಗ ಜಯಹೊಂದುವಿರಿ ಅಂದನು.
20:21b.2CH.020.021 ಅವನು ಜನರ ಸಂಗಡ ಆಲೋಚನೆ ಮಾಡಿದ ತರುವಾಯ ಸೈನ್ಯದ ಮುಂದೆ ಅವರು ಹೊರಡುವಾಗ ಪರಿಶುದ್ಧತ್ವದ ಪ್ರಭೆಯನ್ನು ಸ್ತುತಿಸುವದಕ್ಕೆ ಕರ್ತನನ್ನು ಕೊಂಡಾಡಿರಿ, ಯಾಕಂದರೆ ಆತನ ಕೃಪೆಯು ಯುಗ ಯುಗಕ್ಕೂ ಇರುವದೆಂದು ಹೇಳುವದಕ್ಕೆ ಕರ್ತ ನಿಗೆ ಸಂಗೀತಗಾರರನ್ನು ನೇಮಿಸಿದನು.
20:22b.2CH.020.022 ಅವರು ಹಾಡುವದಕ್ಕೂ ಸ್ತುತಿಸುವದಕ್ಕೂ ಆರಂಭಿಸಿದಾಗಲೇ ಕರ್ತನು ಯೆಹೂದದ ಮೇಲೆ ಬಂದ ಅಮ್ಮೋನ್, ಮೋವಾಬ್, ಸೇಯಾರ್ ಪರ್ವತಗಳ ಮಕ್ಕಳಿಗೆ ವಿರೋಧವಾಗಿ ಹೊಂಚಿಕೊಳ್ಳುವವರನ್ನು ಇಟ್ಟಿದ್ದ ರಿಂದ ಅವರು ಹೊಡೆಯಲ್ಪಟ್ಟಿದ್ದರು.
20:23b.2CH.020.023 ಅಮ್ಮೋನ್, ಮೋವಾಬ್ಯರ ಮಕ್ಕಳು ಸೇಯಾರ್ ಪರ್ವತದ ನಿವಾಸಿ ಗಳನ್ನು ಸಂಪೂರ್ಣವಾಗಿ ನಾಶಮಾಡಲು ನಿಂತರು. ಅವರು ಸೇಯಾರಿನ ನಿವಾಸಿಗಳನ್ನು ಮುಗಿಸಿಬಿಟ್ಟ ತರುವಾಯ ತಾವೇ ಒಬ್ಬರನ್ನೊಬ್ಬರು ನಾಶಮಾಡಲು ಸಹಾಯ ಕೊಟ್ಟರು.
20:24b.2CH.020.024 ಯೆಹೂದದವರು ಅರಣ್ಯದಲ್ಲಿ ರುವ ಬುರುಜಿನ ಸ್ಥಳಕ್ಕೆ ಬಂದಾಗ ಅವರು ಗುಂಪನ್ನು ದೃಷ್ಟಿಸಿದರು; ಇಗೋ, ಅವರಲ್ಲಿ ಒಬ್ಬನೂ ತಪ್ಪದ ಹಾಗೆ ಎಲ್ಲರೂ ನೆಲಕ್ಕೆ ಬಿದ್ದು ಹೆಣಗಳಾಗಿದ್ದರು.
20:25b.2CH.020.025 ಯೆಹೋಷಾಫಾಟನೂ ಅವನ ಜನರೂ ಅವರ ವಸ್ತುಗಳನ್ನು ಕೊಳ್ಳೆಮಾಡಲು ಬಂದಾಗ ಅವರು ಹೆಣ ಗಳ ಬಳಿಯಲ್ಲಿ ದ್ರವ್ಯವನ್ನೂ ಪ್ರಿಯವಾದ ಆಭರಣ ಗಳನ್ನೂ ಬಹಳವಾಗಿ ಕಂಡುಕೊಂಡು ತಾವು ಹೊರ ಲಾರದಷ್ಟು ಸುಲುಕೊಂಡರು. ಕೊಳ್ಳೆಯು ಅಷ್ಟು ಅಧಿಕವಾದದರಿಂದ ಅದನ್ನು ಮೂರು ದಿವಸಗಳ ವರೆಗೂ ಸುಲುಕೊಳ್ಳುತ್ತಾ ಇದ್ದರು.
20:26b.2CH.020.026 ನಾಲ್ಕನೇ ದಿವಸ ದಲ್ಲಿ ಅವರು ಬೆರಾಕವೆಂಬ ತಗ್ಗಿನಲ್ಲಿ ಕೂಡಿಕೊಂಡು ಅಲ್ಲಿ ಕರ್ತನನ್ನು ಸ್ತುತಿಸಿದರು. ಆದಕಾರಣ ಇಂದಿನ ವರೆಗೂ ಆ ಸ್ಥಳಕ್ಕೆ ಬೆರಾಕ ತಗ್ಗು ಎಂದು ಕರೆಯುತ್ತಾರೆ.
20:27b.2CH.020.027 ಕರ್ತನು ಅವರ ಶತ್ರುಗಳ ಮೇಲೆ ಅವರನ್ನು ಸಂತೋ ಷಪಡುವಂತೆ ಮಾಡಿದ್ದರಿಂದ ಅವರು ಸಂತೋಷವಾಗಿ ಯೆರೂಸಲೇಮಿಗೆ ತಿರಿಗಿ ಹೋಗುವದಕ್ಕೆ ಯೆಹೂದ ಯೆರೂಸಲೇಮಿನವರೆಲ್ಲರೂ ಅವರ ಮುಂಭಾಗ ದಲ್ಲಿ ಯೆಹೋಷಾಫಾಟನೂ ಹೊರಟು
20:28b.2CH.020.028 ವೀಣೆಗ ಳಿಂದಲೂ ಕಿನ್ನರಿಗಳಿಂದಲೂ ತುತೂರಿಗಳಿಂದಲೂ ಯೆರೂಸಲೇಮಿನಲ್ಲಿ ಪ್ರವೇಶಿಸಿ ಕರ್ತನ ಆಲಯಕ್ಕೆ ಬಂದರು.
20:29b.2CH.020.029 ಕರ್ತನು ಇಸ್ರಾಯೇಲಿನ ಶತ್ರುಗಳ ಮೇಲೆ ಯುದ್ಧಮಾಡಿದನೆಂದು ಅವರು ಕೇಳಿದಾಗ ದೇವರ ಭಯವು ಆ ದೇಶಗಳ ಸಕಲ ರಾಜ್ಯಗಳ ಮೇಲೆ ಬಿತ್ತು.
20:30b.2CH.020.030 ಆದದರಿಂದ ಯೆಹೋಷಾಫಾಟನ ರಾಜ್ಯವು ಶಾಂತವಾಗಿತ್ತು; ಅವನ ದೇವರು ಸುತ್ತಲೂ ಅವನಿಗೆ ವಿಶ್ರಾಂತಿ ಕೊಟ್ಟನು.
20:31b.2CH.020.031 ಹೀಗೆ ಯೆಹೋಷಾಫಾಟನು ಯೆಹೂದದ ಮೇಲೆ ಆಳಿದನು. ಅವನು ಆಳಲು ಆರಂಭಿಸಿದಾಗ ಮೂವತ್ತೈದು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಇಪ್ಪತ್ತೈದು ವರುಷ ಆಳಿದನು. ಅವನ ತಾಯಿಯ ಹೆಸರು ಅಜೂಬಳು; ಆಕೆಯು ಶಿಲ್ಹಿಯ ಮಗಳಾ ಗಿದ್ದಳು.
20:32b.2CH.020.032 ಅವನು ತನ್ನ ತಂದೆಯಾದ ಆಸನ ಮಾರ್ಗ ದಲ್ಲಿ ನಡೆದು ಅದನ್ನು ಬಿಟ್ಟುಬಿಡದೆ ಕರ್ತನ ಸಮ್ಮುಖ ದಲ್ಲಿ ಸರಿಯಾದದ್ದನ್ನು ಮಾಡಿದನು.
20:33b.2CH.020.033 ಆದರೆ ಉನ್ನತ ಸ್ಥಳಗಳು ಇನ್ನೂ ತೆಗೆದುಹಾಕಲ್ಪಡಲಿಲ್ಲ. ಜನರು ತಮ್ಮ ಹೃದಯಗಳನ್ನು ತಮ್ಮ ಪಿತೃಗಳ ದೇವರ ಕಡೆಗೆ ಇನ್ನೂ ಸಿದ್ಧಮಾಡಿರಲಿಲ್ಲ;
20:34b.2CH.020.034 ಯೆಹೋಷಾಫಾಟನ ಇತರ ಕ್ರಿಯೆಗಳು, ಮೊದಲನೆಯವುಗಳೂ ಕಡೆಯವುಗಳೂ ಇಗೋ, ಇಸ್ರಾಯೇಲಿನ ಅರಸುಗಳ ಪುಸ್ತಕದಲ್ಲಿ ಹೇಳಲ್ಪಟ್ಟ ಹನಾನೀಯ ಮಗನಾದ ಯೇಹೂವಿನ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
20:35b.2CH.020.035 ಇದರ ತರುವಾಯ ಯೆಹೂದದ ಅರಸನಾದ ಯೆಹೋಷಾಫಾಟನು ಇಸ್ರಾಯೇಲಿನ ಅರಸನೂ ಬಹು ದುಷ್ಟನಾಗಿ ನಡೆದವನೂ ಆದ ಅಹಜ್ಯನ ಸಂಗಡ ಸಹವಾಸಮಾಡಿದನು.
20:36b.2CH.020.036 ಇದಲ್ಲದೆ ತಾರ್ಷಿ ಷಿಗೆ ಹೋಗುವ ನಿಮಿತ್ತ ಹಡಗುಗಳನ್ನು ಮಾಡಿಸಲು ಅವನ ಸಂಗಡ ಸೇರಿಕೊಂಡನು. ಅವರು ಎಚ್ಯೋನ್ಗೆಬೆ ರಿನಲ್ಲಿ ಹಡಗುಗಳನ್ನು ಮಾಡಿಸಿದನು.ಆಗ ಮಾರೇ ಷಾದವನಾಗಿರುವ ದೋದಾವಾಹುವಿನ ಮಗನಾದ ಎಲೀಯೆಜರನು ಯೆಹೋಷಾಫಾಟನಿಗೆ ವಿರೋಧ ವಾಗಿ ಪ್ರವಾದಿಸಿ--ನೀನು ಅಹಜ್ಯನ ಸಂಗಡ ಸೇರಿ ಕೊಂಡಿದ್ದರಿಂದ ಕರ್ತನು ನಿನ್ನ ಕ್ರಿಯೆಗಳನ್ನು ಹಾಳು ಮಾಡಿಬಿಟ್ಟನೆಂದು ಹೇಳಿದನು. ಹಡಗುಗಳು ತಾರ್ಷಿ ಷಿಗೆ ಹೋಗ ಕೂಡದ ಹಾಗೆ ಒಡೆಯಲ್ಪಟ್ಟವು.
20:37b.2CH.020.037 ಆಗ ಮಾರೇ ಷಾದವನಾಗಿರುವ ದೋದಾವಾಹುವಿನ ಮಗನಾದ ಎಲೀಯೆಜರನು ಯೆಹೋಷಾಫಾಟನಿಗೆ ವಿರೋಧ ವಾಗಿ ಪ್ರವಾದಿಸಿ--ನೀನು ಅಹಜ್ಯನ ಸಂಗಡ ಸೇರಿ ಕೊಂಡಿದ್ದರಿಂದ ಕರ್ತನು ನಿನ್ನ ಕ್ರಿಯೆಗಳನ್ನು ಹಾಳು ಮಾಡಿಬಿಟ್ಟನೆಂದು ಹೇಳಿದನು. ಹಡಗುಗಳು ತಾರ್ಷಿ ಷಿಗೆ ಹೋಗ ಕೂಡದ ಹಾಗೆ ಒಡೆಯಲ್ಪಟ್ಟವು.
21
21:1b.2CH.021.001 ಆದರೆ ಯೆಹೋಷಾಫಾಟನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ದಾವೀದನ ಪಟ್ಟಣ ದಲ್ಲಿ ತನ್ನ ಪಿತೃಗಳ ಸಂಗಡ ಹೂಣಲ್ಪಟ್ಟನು. ಅವನ ಮಗನಾದ ಯೆಹೋರಾಮನು ಅವನಿಗೆ ಬದಲಾಗಿ ಆಳಿದನು.
21:2b.2CH.021.002 ಇವನ ಸಹೋದರರಾಗಿರುವ ಯೆಹೋ ಷಾಫಾಟನ ಕುಮಾರರಾದ ಅಜರ್ಯನೂ ಯೆಹೀ ಯೇಲನೂ ಜೆಕರ್ಯನೂ ಅಜರ್ಯನೂ ವಿಾಕಾಯೇ ಲನೂ ಶೆಫಟ್ಯನೂ ಇದ್ದರು. ಇವರೆಲ್ಲರು ಇಸ್ರಾ ಯೇಲಿನ ಅರಸನಾದ ಯೆಹೋಷಾಫಾಟನ ಕುಮಾ ರರು.
21:3b.2CH.021.003 ಅವರ ತಂದೆಯು ಯೆಹೂದದಲ್ಲಿ ಕೋಟೆ ಯುಳ್ಳ ಪಟ್ಟಣಗಳ ಸಂಗಡ ಬೆಳ್ಳಿಬಂಗಾರವನ್ನೂ ಬೆಲೆ ಯುಳ್ಳ ವಸ್ತುಗಳನ್ನೂ ಅವರಿಗೆ ದಾನಗಳಾಗಿ ಕೊಟ್ಟನು. ಆದರೆ ಯೆಹೋರಾಮನು ಚೊಚ್ಚಲು ಮಗನಾದದ ರಿಂದ ಅವನಿಗೆ ರಾಜ್ಯವನ್ನು ಕೊಟ್ಟನು.
21:4b.2CH.021.004 ಯೆಹೋ ರಾಮನು ತನ್ನ ತಂದೆಯ ರಾಜ್ಯಕ್ಕೆ ಬಂದ ತರುವಾಯ ಅವನು ತನ್ನನ್ನು ಬಲಪಡಿಸಿಕೊಂಡು ತನ್ನ ಸಮಸ್ತ ಸಹೋದರರನ್ನೂ ಇಸ್ರಾಯೇಲಿನ ಪ್ರಧಾನರಲ್ಲಿ ಕೆಲ ವರನ್ನೂ ಕತ್ತಿಯಿಂದ ಕೊಂದುಹಾಕಿದನು.
21:5b.2CH.021.005 ಯೆಹೋ ರಾಮನು ಆಳಲಾರಂಭಿಸಿದಾಗ ಮೂವತ್ತೆರಡು ವರುಷ ದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರುಷ ಆಳಿದನು.
21:6b.2CH.021.006 ಅಹಾಬನ ಮನೆಯವರು ನಡೆದ ಹಾಗೆ ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು. ಅಹಾಬನ ಮಗಳು ಅವನಿಗೆ ಹೆಂಡತಿ ಯಾಗಿದ್ದಳು. ಅವನು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು,
21:7b.2CH.021.007 ಆದರೆ ಕರ್ತನು ದಾವೀದನ ಸಂಗಡ ಮಾಡಿದ ಒಡಂಬಡಿಕೆಗೋಸ್ಕರವೂ ಆತನು ಅವನಿಗೂ ಅವನ ಮಕ್ಕಳಿಗೂ ಸರ್ವಕಾಲಕ್ಕೂ ಬೆಳಕನ್ನು ಕೊಡು ವೆನೆಂದು ಹೇಳಿದ್ದರಿಂದಲೂ ಆತನು ದಾವೀದನ ಮನೆಯನ್ನು ನಾಶಮಾಡಲು ಮನಸ್ಸಿಲ್ಲದೆ ಇದ್ದನು.
21:8b.2CH.021.008 ಯೆಹೋರಾಮನ ದಿನಗಳಲ್ಲಿ ಎದೋಮ್ಯರು ಯೆಹೂ ದ್ಯರ ರಾಜ್ಯದ ಅಧೀನದಿಂದ ತಿರುಗಿಬಿದ್ದು ತಮಗೆ ತಾವೇ ಅರಸನನ್ನು ಮಾಡಿಕೊಂಡರು;
21:9b.2CH.021.009 ಆಗ ಅವನು ತನ್ನ ಪ್ರಧಾನರ ಸಂಗಡಲೂ ಸಮಸ್ತ ರಥಗಳ ಸಂಗ ಡಲೂ ಹೊರಟು ಹೋಗಿ ರಾತ್ರಿಯಲ್ಲಿ ಎದ್ದು ತನ್ನನ್ನೂ ರಥಗಳ ಅಧಿಪತಿಗಳನ್ನೂ ಸುತ್ತಿಕೊಂಡಿದ್ದ ಎದೋಮ್ಯರನ್ನು ಹೊಡೆದನು.
21:10b.2CH.021.010 ಹೀಗೆಯೇ ಇಂದಿನ ವರೆಗೂ ಎದೋಮ್ಯರು ಯೆಹೂದ್ಯರ ಅಧೀನಕ್ಕೆ ತಿರುಗಿ ಬಿದ್ದರು. ಅದೇ ಕಾಲದಲ್ಲಿ ಅವರು ತಮ್ಮ ಪಿತೃಗಳ ದೇವರಾದ ಕರ್ತನನ್ನು ಬಿಟ್ಟುಬಿಟ್ಟದ್ದರಿಂದ ಲಿಬ್ನವು ಅವರ ಅಧೀನಕ್ಕೆ ತಪ್ಪಿ ತಿರುಗಿಬಿತ್ತು.
21:11b.2CH.021.011 ಅವನು ಯೆಹೂದದ ಪರ್ವತಗಳಲ್ಲಿ ಉನ್ನತ ಸ್ಥಳಗಳನ್ನು ಮಾಡಿ ಯೆರೂಸಲೇಮಿನ ನಿವಾಸಿಗಳನ್ನು ವ್ಯಭಿಚಾರ ಮಾಡಲು ಪ್ರೇರೇಪಿಸಿ ಹಾಗೆಯೇ ಮಾಡಲು ಯೆಹೂ ದದವರನ್ನು ಬಲವಂತ ಮಾಡಿದನು.
21:12b.2CH.021.012 ಆದಕಾರಣ ಪ್ರವಾದಿಯಾದ ಎಲೀಯನಿಂದ ಅವನಿಗೆ ಒಂದು ಬರಹವು ಬಂತು. ಏನಂದರೆ--ನಿನ್ನ ತಂದೆಯಾದ ದಾವೀದನ ದೇವರಾದ ಕರ್ತನು ಹೀಗೆ ಹೇಳುತ್ತಾನೆನೀನು ನಿನ್ನ ತಂದೆಯಾದ ಯೆಹೋಷಾಫಾಟನ ಮಾರ್ಗ ಗಳಲ್ಲಿಯೂ ಯೆಹೂದದ ಅರಸನಾದ ಆಸನ ಮಾರ್ಗ ಗಳಲ್ಲಿಯೂ ನಡೆಯದೆ
21:13b.2CH.021.013 ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದು ಅಹಾಬನ ಮನೆಯ ವ್ಯಭಿಚಾರಿ ಗಳ ಹಾಗೆ ಯೆಹೂದದವರನ್ನೂ ಯೆರೂಸಲೇಮಿನ ನಿವಾಸಿಗಳನ್ನೂ ವ್ಯಭಿಚಾರ ಮಾಡಲು ಪ್ರೇರೇಪಿಸಿ ನಿನಗಿಂತ ಉತ್ತಮರಾಗಿರುವ ನಿನ್ನ ತಂದೆಯ ಮನೆ ಯವರಾದ ನಿನ್ನ ಸಹೋದರರನ್ನು ಕೊಂದುಹಾಕಿ ದ್ದರಿಂದ
21:14b.2CH.021.014 ಇಗೋ, ಕರ್ತನು ದೊಡ್ಡ ಬಾಧೆಯಿಂದ ನಿನ್ನ ಜನರನ್ನೂ ಮಕ್ಕಳನ್ನೂ ಹೆಂಡತಿಯರನ್ನೂ ಸಮಸ್ತ ಸ್ಥಿತಿಯನ್ನೂ ಬಾಧಿಸುತ್ತಾನೆ.
21:15b.2CH.021.015 ಇದಲ್ಲದೆ ದಿನದಿನಕ್ಕೆ ರೋಗ ಅನುಭವಿಸುವದರಿಂದ ನಿನ್ನ ಕರುಳುಗಳು ಹೊರಕ್ಕೆ ಹೊರಡುವ ವರೆಗೆ ನಿನ್ನ ಕರುಳುಗಳ ರೋಗದಿಂದ ನಿನಗೆ ಮಹಾರೋಗ ಉಂಟಾಗಿರುವದು ಎಂಬದೇ.
21:16b.2CH.021.016 ಇದಲ್ಲದೆ ಕೂಷಿಯರ ಬಳಿಯಲ್ಲಿದ್ದ ಫಿಲಿಷ್ಟಿಯರ ಮತ್ತು ಅರಬ್ಬಿಯರ ಮನಸ್ಸನ್ನು ಯೆಹೋರಾಮನಿಗೆ ವಿರೋಧವಾಗಿ ಕರ್ತನು ಎಬ್ಬಿಸಿದನು.
21:17b.2CH.021.017 ಆಗ ಅವರು ಯೆಹೂದದ ಮೇಲೆ ಬಂದು ಅದರಲ್ಲಿ ಹೊಕ್ಕು ಅರಸನ ಮನೆಯಲ್ಲಿ ಸಿಕ್ಕಿದ ಸಮಸ್ತ ಆಸ್ತಿಯನ್ನೂ ಅವನ ಕುಮಾರರನ್ನೂ ಹೆಂಡತಿಯರನ್ನೂ ತಕ್ಕೊಂಡು ಹೋದರು. ಆದದರಿಂದ ಅವನ ಕುಮಾರರಲ್ಲಿ ಚಿಕ್ಕವ ನಾದ ಯೆಹೋವಾಹಾಜನು ಹೊರತು ಅವನಿಗೆ ಕುಮಾರರು ಯಾರೂ ಬಿಡಲ್ಪಡಲಿಲ್ಲ.
21:18b.2CH.021.018 ಇದೆಲ್ಲಾದರ ತರುವಾಯ ಕರ್ತನು ಅವನ ಕರುಳುಗಳಲ್ಲಿ ವಾಸಿ ಯಾಗಲಾರದ ರೋಗದಿಂದ ಅವನನ್ನು ಬಾಧಿಸಿದನು;
21:19b.2CH.021.019 ಎರಡು ವರುಷವಾದ ತರುವಾಯ ಏನಾಯಿತಂದರೆ, ರೋಗದಿಂದ ಅವನ ಕರುಳುಗಳು ಹೊರಕ್ಕೆ ಬಂದವು. ಹೀಗೆಯೇ ಅವನು ಕೆಟ್ಟ ರೋಗಗಳಿಂದ ಸತ್ತನು. ಅವನ ಜನರು ಅವನ ಪಿತೃಗಳಿಗೋಸ್ಕರ ಸುಟ್ಟ ಹಾಗೆ ಅವನಿಗೋಸ್ಕರ ಸುಡಲಿಲ್ಲ.ಅವನು ಆಳಲಾರಂಭಿಸಿದಾಗ ಮೂವತ್ತೆರಡು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರುಷ ಆಳಿ ಯಾರಿಗೂ ಇಷ್ಪವಿಲ್ಲದವನಾಗಿ ಹೋದನು. ಆದರೂ ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಅರಸುಗಳ ಸಮಾಧಿ ಗಳಲ್ಲಿ ಅಲ್ಲ.
21:20b.2CH.021.020 ಅವನು ಆಳಲಾರಂಭಿಸಿದಾಗ ಮೂವತ್ತೆರಡು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರುಷ ಆಳಿ ಯಾರಿಗೂ ಇಷ್ಪವಿಲ್ಲದವನಾಗಿ ಹೋದನು. ಆದರೂ ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಅರಸುಗಳ ಸಮಾಧಿ ಗಳಲ್ಲಿ ಅಲ್ಲ.
22
22:1b.2CH.022.001 ಯೆರೂಸಲೇಮಿನ ನಿವಾಸಿಗಳು ಅವನಿಗೆ ಬದಲಾಗಿ ಅವನ ಚಿಕ್ಕ ಮಗನಾದ ಅಹಜ್ಯ ನನ್ನು ಅರಸನಾಗಿ ಮಾಡಿದರು. ದಂಡಿಗೆ ಬಂದ ಅರಬ್ಬಿಯರ ಗುಂಪು ಹಿರಿಯರನ್ನೆಲ್ಲಾ ಕೊಂದುಹಾಕಿ ದರು. ಹೀಗೆ ಯೆಹೋರಾಮನ ಮಗನಾದ ಅಹಜ್ಯನು ಯೆಹೂದದ ಅರಸನಾಗಿ ಆಳಿದನು.
22:2b.2CH.022.002 ಅಹಜ್ಯನು ಆಳಲು ಆರಂಭಿಸಿದಾಗ ನಾಲ್ವತ್ತೆರಡು ವರುಷದವ ನಾಗಿದ್ದು ಯೆರೂಸಲೇಮಿನಲ್ಲಿ ಒಂದು ವರುಷ ಆಳಿ ದನು. ಅವನ ತಾಯಿಯ ಹೆಸರು ಅತಲ್ಯಳು; ಈಕೆಯು ಒಮ್ರಿಯ ಮಗಳಾಗಿದ್ದಳು.
22:3b.2CH.022.003 ಅವನು ಅಹಾಬನ ಮನೆ ಯವರ ಮಾರ್ಗಗಳಲ್ಲಿ ನಡೆದನು. ಹೇಗಂದರೆ ದುಷ್ಟ ನಾಗಿರುವದಕ್ಕೆ ಅವನ ತಾಯಿ ಅವನಿಗೆ ಆಲೋಚನೆ ಹೇಳುವವಳಾಗಿದ್ದಳು.
22:4b.2CH.022.004 ಆದಕಾರಣ ಅವನು ಅಹಾಬನ ಮನೆಯವರ ಹಾಗೆ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಅವನ ತಂದೆ ಸತ್ತ ತರುವಾಯ ಇವರು ಅವರ ನಾಶನಕ್ಕೆ ಅವನ ಸಲಹೆಗಾರರಾಗಿದ್ದರು.
22:5b.2CH.022.005 ಅವನು ಇವರ ಯೋಚನೆಯ ಪ್ರಕಾರ ನಡೆದು ಗಿಲ್ಯಾದಿನಲ್ಲಿರುವ ರಾಮೋತಿನ ಬಳಿಯಲ್ಲಿ ಅರಾಮಿನ ಅರಸನಾದ ಹಜಾಯೇಲನ ಮೇಲೆ ಯುದ್ಧ ಮಾಡಲು ಇಸ್ರಾಯೇಲಿನ ಅರಸನಾಗಿರುವ ಅಹಾಬನ ಮಗ ನಾದ ಯೆಹೋರಾಮನ ಸಂಗಡ ಹೋದನು.
22:6b.2CH.022.006 ಆದರೆ ಅರಾಮ್ಯರು ಯೆಹೋರಾಮನನ್ನು ಹೊಡೆದರು. ಅವನು ಅರಾಮಿನ ಹಜಾಯೇಲನ ಸಂಗಡ ಯುದ್ಧ ಮಾಡುವಾಗ ರಾಮದಲ್ಲಿ ಗಾಯಗಳನ್ನು ಹೊಂದಿದ್ದ ರಿಂದ ಇಜ್ರೇಲಿನಲ್ಲಿ ಗುಣಮಾಡಿಕೊಳ್ಳಲು ತಿರಿಗಿದನು. ಯೆಹೂದದ ಅರಸನಾಗಿರುವ ಯೆಹೋರಾಮನ ಮಗನಾದ ಅಹಜ್ಯನು ಇಜ್ರೇಲಿನಲ್ಲಿರುವ ಅಹಾ ಬನ ಮಗನಾದ ಯೆಹೋರಾಮನನ್ನು ನೋಡಲು ಬಂದನು; ಯಾಕಂದರೆ ಇವನು ರೋಗಸ್ಥನಾಗಿದ್ದನು.
22:7b.2CH.022.007 ಯೆಹೋರಾಮನ ಬಳಿಗೆ ಅವನು ಬಂದದ್ದರಿಂದ ಅಹಜ್ಯನಿಗೆ ಉಂಟಾದ ನಷ್ಟವು ದೇವರಿಂದ ಆಯಿತು. ಹೇಗಂದರೆ ಅವನು ಬಂದ ತರುವಾಯ ಕರ್ತನು ಅಹಾಬನ ಮನೆಯನ್ನು ಕಡಿದು ಬಿಡಲು ಅಭಿಷೇಕಿಸಿದ ನಿಂಷಿಯ ಮಗನಾದ ಯೇಹುವಿಗೆ ವಿರೋಧವಾಗಿ ಯೆಹೋರಾಮನ ಸಂಗಡ ಹೊರಟನು.
22:8b.2CH.022.008 ಯೇಹುವು ಅಹಾಬನ ಮನೆಗೆ ನ್ಯಾಯತೀರಿಸುವಾಗ ಅವನು ಯೆಹೂದ್ಯರ ಪ್ರಧಾನರನ್ನೂ ಅಹಜ್ಯನನ್ನು ಸೇವಿಸು ತ್ತಿರುವ ಅಹಜ್ಯನ ಸಹೋದರರ ಮಕ್ಕಳನ್ನೂ ಹಿಡಿದು ಅವರನ್ನು ಕೊಂದುಹಾಕಿದನು.
22:9b.2CH.022.009 ಇದಲ್ಲದೆ ಅವನು ಅಹಜ್ಯನನ್ನು ಹುಡುಕಿದನು; ಅವನು ಸಮಾರ್ಯದಲ್ಲಿ ಬಚ್ಚಿಟ್ಟು ಕೊಂಡದ್ದರಿಂದ ಅವನನ್ನು ಹಿಡಿದು ಯೇಹು ವಿನ ಬಳಿಗೆ ಅವನನ್ನು ತಕ್ಕೊಂಡು ಬಂದು ಅವನನ್ನು ಕೊಂದುಹಾಕಿ ಹೂಣಿಟ್ಟರು; ಯಾಕಂದರೆ ಇವನು ತನ್ನ ಪೂರ್ಣಹೃದಯದಿಂದ ಕರ್ತನನ್ನು ಹುಡುಕಿದ ಯೆಹೋಷಾಫಾಟನ ಮಗನು ಅಂದರು. ಹೀಗೆ ರಾಜ್ಯ ವನ್ನು ಸ್ಥಿರಪಡಿಸಲು ಅಹಜ್ಯನ ಮನೆಗೆ ಶಕ್ತಿ ಇಲ್ಲದೆ ಹೋಯಿತು.
22:10b.2CH.022.010 ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗನು ಸತ್ತನೆಂದು ಕಂಡಾಗ ಅವಳು ಎದ್ದು ಯೆಹೂದನ ಮನೆಯ ರಾಜ್ಯದ ಸಂತಾನವನ್ನೆಲ್ಲಾ ನಾಶಮಾಡಿದಳು.
22:11b.2CH.022.011 ಆದರೆ ಅರಸನ ಮಗಳಾದ ಯೆಹೋಷಬತಳು ಅಹಜ್ಯನ ಮಗನಾದ ಯೆಹೋವಾಷನನ್ನು ತಕ್ಕೊಂಡು ಕೊಂದುಹಾಕಲ್ಪಟ್ಟ ಅರಸನ ಮಕ್ಕಳ ಮಧ್ಯದಿಂದ ಅವನನ್ನು ಕದ್ದುಕೊಂಡು ಅವನನ್ನೂ ಅವನ ದಾದಿ ಯನ್ನೂ ಮಲಗುವ ಕೋಣೆಯಲ್ಲಿ ಇರಿಸಿದಳು. ಹೀಗೆ ಅತಲ್ಯಳು ಅವನನ್ನು ಕೊಲ್ಲದ ಹಾಗೆ ಅರಸನಾದ ಯೆಹೋರಾಮನ ಕುಮಾರ್ತೆಯಾಗಿರುವ ಯಾಜ ಕನಾದ ಯೆಹೋಯಾದನ ಹೆಂಡತಿಯಾಗಿರುವ ಯೆಹೋಷಬತಳು ಬಚ್ಚಿಟ್ಟಳು.ಹೀಗೆಯೇ ಇವನು ಅವರ ಸಂಗಡ ದೇವರ ಆಲಯದಲ್ಲಿ ಆರು ವರುಷ ಬಚ್ಚಿಟ್ಟುಕೊಂಡಿದ್ದನು. ಆದರೆ ಅತಲ್ಯಳು ದೇಶದ ಮೇಲೆ ಆಳುತ್ತಿದ್ದಳು.
22:12b.2CH.022.012 ಹೀಗೆಯೇ ಇವನು ಅವರ ಸಂಗಡ ದೇವರ ಆಲಯದಲ್ಲಿ ಆರು ವರುಷ ಬಚ್ಚಿಟ್ಟುಕೊಂಡಿದ್ದನು. ಆದರೆ ಅತಲ್ಯಳು ದೇಶದ ಮೇಲೆ ಆಳುತ್ತಿದ್ದಳು.
23
23:1b.2CH.023.001 ಏಳನೇ ವರುಷದಲ್ಲಿ ಯೆಹೋಯಾದನು ತನ್ನನ್ನು ಬಲಪಡಿಸಿಕೊಂಡು ಶತಾಧಿಪತಿ ಗಳಾಗಿರುವ ಯೆರೋಹಾಮನ ಮಗನಾದ ಅಜರ್ಯ ನನ್ನೂ ಯೆಹೋಹಾನಾನನ ಮಗನಾದ ಇಷ್ಮಾಯೇಲ ನನ್ನೂ ಓಬೇದನ ಮಗನಾದ ಅಜರ್ಯನನ್ನೂ ಅದಾ ಯನ ಮಗನಾದ ಮಾಸೆಯನನ್ನೂ ಜಿಕ್ರಿಯ ಮಗನಾದ ಎಲೀಷಾಫಾಟನನ್ನೂ ಕರಕೊಂಡು ಅವರ ಸಂಗಡ ಒಡಂಬಡಿಕೆ ಮಾಡಿದನು.
23:2b.2CH.023.002 ಇವರು ಯೆಹೂದವನ್ನು ಸಂಚರಿಸಿ ಯೆಹೂದದ ಸಮಸ್ತ ಪಟ್ಟಣಗಳಿಂದ ಲೇವಿ ಯರನ್ನೂ ಇಸ್ರಾಯೇಲಿನ ಮುಖ್ಯಸ್ಥರಾದ ಪಿತೃಗಳನ್ನೂ ಕೂಡಿಸಿಕೊಂಡು ಯೆರೂಸಲೇಮಿಗೆ ಬಂದರು.
23:3b.2CH.023.003 ಆಗ ಸಭೆಯವರೆಲ್ಲರು ದೇವರ ಆಲಯದಲ್ಲಿ ಅರ ಸನ ಸಂಗಡ ಒಡಂಬಡಿಕೆ ಮಾಡಿದರು. ಅವರಿಗೆಇಗೋ, ದಾವೀದನ ಕುಮಾರರನ್ನು ಕುರಿತು ಕರ್ತನು ಹೇಳಿದ ಹಾಗೆ ಅರಸನ ಕುಮಾರನು ಆಳುವನು.
23:4b.2CH.023.004 ನೀವು ಮಾಡಬೇಕಾದ ಕಾರ್ಯವೇನಂದರೆ, ಸಬ್ಬತ್ತಿ ನಲ್ಲಿ ಪ್ರವೇಶಿಸುವ ಯಾಜಕರೂ ಲೇವಿಯರೂ ಆದ ನಿಮ್ಮಲ್ಲಿರುವ ಮೂರನೇ ಪಾಲು ದ್ವಾರಪಾಲಕರಾಗಿರ ಬೇಕು.
23:5b.2CH.023.005 ಮೂರನೇ ಪಾಲು ಅರಸನ ಬಳಿಯಲ್ಲಿಯೂ ಇನ್ನೊಂದು ಮೂರನೇ ಪಾಲು ಅಸ್ತಿವಾರದ ಬಾಗಲ ಬಳಿಯಲ್ಲಿಯೂ ಸಮಸ್ತ ಜನರು ಕರ್ತನ ಆಲಯದ ಅಂಗಳಗಳಲ್ಲಿಯೂ ಇರಬೇಕು.
23:6b.2CH.023.006 ಆದರೆ ಯಾಜಕರೂ ಲೇವಿಯರಲ್ಲಿ ಸೇವೆ ಮಾಡುವವರೂ ಅಲ್ಲದೆ ಮತ್ತ್ಯಾರೂ ಕರ್ತನ ಆಲಯದಲ್ಲಿ ಪ್ರವೇಶಿಸಕೂಡದು. ಅವರು ಪರಿಶುದ್ಧರಾದದರಿಂದ ಒಳಗೆ ಪ್ರವೇಶಿಸಲಿ. ಆದರೆ ಸಮಸ್ತ ಜನರು ಕರ್ತನ ಕಾವಲನ್ನು ಕಾಯಲಿ.
23:7b.2CH.023.007 ಇದಲ್ಲದೆ ಲೇವಿಯರಲ್ಲಿ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ಆಯುಧಗಳನ್ನು ಹಿಡುಕೊಂಡು ಅರಸನ ಸುತ್ತಲೂ ಇರಬೇಕು. ಇವರ ಹೊರತು ಯಾವನಾ ದರೂ ಆಲಯದಲ್ಲಿ ಬಂದರೆ ಅವನು ಕೊಲ್ಲಲ್ಪಡಲಿ. ಅರಸನು ಒಳಗೆ ಬರುವಾಗಲೂ ಹೊರಗೆ ಹೋಗು ವಾಗಲೂ ನೀವು ಅವನ ಸಂಗಡ ಇರ್ರಿ ಅಂದನು.
23:8b.2CH.023.008 ಹೀಗೆಯೇ ಲೇವಿಯರೂ ಸಮಸ್ತ ಯೆಹೂದದವರೂ ಯಾಜಕನಾದ ಯೆಹೋಯಾದನು ಆಜ್ಞಾಪಿಸಿದ ಎಲ್ಲಾ ದರ ಪ್ರಕಾರ ಮಾಡಿ ಪ್ರತಿ ಮನುಷ್ಯನು ಸಬ್ಬತ್ತಿನಲ್ಲಿ ಒಳಗೆ ಬರಬೇಕಾದ ತನ್ನ ಮನುಷ್ಯರನ್ನೂ ಸಬ್ಬತ್ತಿ ನಲ್ಲಿ ಹೊರಟು ಹೋಗಬೇಕಾದವರನ್ನೂ ತೆಗೆದು ಕೊಂಡನು. ಯಾಜಕನಾದ ಯೆಹೋಯಾದನು ಅವ ರನ್ನು ಕಳುಹಿಸಿ ಬಿಡಲಿಲ್ಲ.
23:9b.2CH.023.009 ಇದಲ್ಲದೆ ಯಾಜಕನಾದ ಯೆಹೋಯಾದನು ದೇವರ ಆಲಯದಲ್ಲಿದ್ದ ಅರಸ ನಾದ ದಾವೀದನ ಈಟಿಗಳನ್ನೂ ಗುರಾಣಿಗಳನ್ನೂ ಡಾಲುಗಳನ್ನೂ ಶತಾಧಿಪತಿಗಳಾದವರಿಗೆ ಕೊಟ್ಟು
23:10b.2CH.023.010 ಅರಸನ ಸುತ್ತಲೂ ಇರುವದಕ್ಕೆ ಬಲಿಪೀಠಕ್ಕೂ ಆಲಯಕ್ಕೂ ಎದುರಾಗಿ ಆಲಯದ ಬಲಪಾರ್ಶ್ವ ಮೊದಲುಗೊಂಡು ಆಲಯದ ಎಡಪಾರ್ಶ್ವದ ವರೆಗೂ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ತನ್ನ ಆಯುಧ ಹಿಡಿದವರಾಗಿ ಸಮಸ್ತ ಜನರನ್ನೂ ಇರಿಸಿದನು.
23:11b.2CH.023.011 ಆಗ ಅವರು ಅರಸನ ಮಗನನ್ನು ಹೊರಕ್ಕೆ ಕರತಂದು ಅವನ ತಲೆಯ ಮೇಲೆ ಕಿರೀಟ ವನ್ನಿಟ್ಟು ಸಾಕ್ಷಿಯನ್ನು ಕೊಟ್ಟು ಅವನನ್ನು ಅರಸನನ್ನಾಗಿ ಮಾಡಿದರು. ಯೆಹೋಯಾದನೂ ಅವನ ಮಕ್ಕಳೂ ಅವನನ್ನು ಅಭಿಷೇಕಿಸಿ--ದೇವರು ಅರಸನನ್ನು ರಕ್ಷಿಸಲಿ ಅಂದರು.
23:12b.2CH.023.012 ಆದರೆ ಓಡುತ್ತಾ ಅರಸನನ್ನು ಹರಸುತ್ತಿದ್ದ ಜನರ ಶಬ್ದವನ್ನು ಅತಲ್ಯಳು ಕೇಳಿದಾಗ ಅವಳು ಕರ್ತನ ಆಲಯದಲ್ಲಿ ಜನರ ಬಳಿಗೆ ಬಂದು ನೋಡಿದಳು.
23:13b.2CH.023.013 ಇಗೋ, ಪ್ರವೇಶದ್ವಾರದ ತನ್ನ ಸ್ತಂಭದ ಬಳಿ ಯಲ್ಲಿ ಅರಸನು ನಿಂತಿದ್ದನು. ಪ್ರಧಾನರೂ ತುತೂರಿ ಹಿಡಿಯುವವರೂ ಅರಸನ ಬಳಿಯಲ್ಲಿ ಇದ್ದರು. ಇದಲ್ಲದೆ ದೇಶದ ಜನರೆಲ್ಲರು ಸಂತೋಷಪಟ್ಟು ತುತೂರಿಗಳನ್ನು ಊದಿದರು. ಹಾಗೆಯೇ ಹಾಡು ಗಾರರೂ ಗೀತವಾದ್ಯಗಳನ್ನು ಹಿಡಿದು ಸ್ತುತಿಸುವದಕ್ಕೆ ಬೋಧಿಸುವವರೂ ಇದ್ದರು. ಆಗ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದು ಕೊಂಡು--ದ್ರೋಹ, ದ್ರೋಹ ಎಂದು ಕೂಗಿದಳು.
23:14b.2CH.023.014 ಆಗ ಯಾಜಕನಾದ ಯೆಹೋ ಯಾದನು ಸೈನ್ಯದ ಮೇಲೆ ಇರುವ ಶತಾಧಿಪತಿಗ ಳನ್ನು ಹೊರಗೆ ಕರತಂದು ಅವರಿಗೆ--ಅವಳನ್ನು ಸಾಲುಗಳ ಹೊರಗೆ ಹೊರಡಿಸಿರಿ, ಅವಳನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಂದುಹಾಕಿರಿ ಅಂದನು. ಯಾಕಂದರೆ ಕರ್ತನ ಆಲಯದಲ್ಲಿ ಅವ ಳನ್ನು ಕೊಲ್ಲಬೇಡಿರಿ ಎಂದು ಯಾಜಕನು ಹೇಳಿದನು.
23:15b.2CH.023.015 ಹಾಗೆಯೇ ಅವರು ಅವಳ ಮೇಲೆ ಕೈ ಹಾಕಿದರು. ಅವಳು ಅರಸನ ಮನೆಯ ಬಳಿಯಲ್ಲಿ ಕುದುರೆ ಬಾಗಲಿನ ಪ್ರವೇಶದಲ್ಲಿ ಬಂದಾಗ ಅಲ್ಲಿ ಅವಳನ್ನು ಕೊಂದು ಹಾಕಿದರು.
23:16b.2CH.023.016 ಆಗ ಅವರು ಕರ್ತನ ಜನರಾಗಿರುವ ಹಾಗೆ ಯೆಹೋಯಾದನು ತನಗೂ ಸಮಸ್ತ ಜನರಿಗೂ ಅರಸ ನಿಗೂ ಒಡಂಬಡಿಕೆ ಮಾಡಿದನು.
23:17b.2CH.023.017 ಸಮಸ್ತ ಜನರು ಬಾಳನ ಮನೆಗೆ ಹೋಗಿ ಅದನ್ನು ಕೆಡವಿಹಾಕಿ ಅದರ ಬಲಿಪೀಠಗಳನ್ನೂ ವಿಗ್ರಹಗಳನ್ನೂ ಒಡೆದುಬಿಟ್ಟು ಬಾಳನ ಪೂಜಾರಿಯಾದ ಮತ್ತಾನನನ್ನು ಬಲಿ ಪೀಠಗಳ ಮುಂದೆ ಕೊಂದುಹಾಕಿದರು.
23:18b.2CH.023.018 ಇದಲ್ಲದೆ ಯೆಹೋ ಯಾದನು ಕರ್ತನ ಆಲಯದ ಪರಿಚಾರಕರನ್ನು ನೇಮಿ ಸಿದನು. ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿ ರುವ ಹಾಗೆ ಸಂತೋಷದಿಂದಲೂ ಸಂಗೀತದಿಂದಲೂ ದಾವೀದನಿಂದ ನೇಮಿಸಲ್ಪಟ್ಟ ಹಾಗೆ ದಾವೀದನು ಕರ್ತನ ದಹನಬಲಿಗಳನ್ನು ಅರ್ಪಿಸುವದಕ್ಕೆ ಕರ್ತನ ಆಲಯ ದಲ್ಲಿ ವಿಭಾಗಿಸಿದ ಲೇವಿಯರಾದ ಯಾಜಕರಿಂದ ಅವರನ್ನು ನೇಮಿಸಿದನು.
23:19b.2CH.023.019 ಕರ್ತನ ಆಲಯದಲ್ಲಿ ಯಾವ ಅಪವಿತ್ರವಾದದ್ದೂ ಒಳಗೆ ಪ್ರವೇಶಿಸದ ಹಾಗೆ ಬಾಗಲುಗಳ ಬಳಿಯಲ್ಲಿ ದ್ವಾರಪಾಲಕರನ್ನು ಇರಿಸಿ ದನು.
23:20b.2CH.023.020 ಅವನು ಶತಾಧಿಪತಿಗಳನ್ನೂ ಗೌರವಸ್ಥರನ್ನೂ ಜನರ ಅಧಿಪತಿಗಳನ್ನೂ ದೇಶದ ಜನರೆಲ್ಲರನ್ನೂ ಕರ ಕೊಂಡು ಅರಸನನ್ನು ಕರ್ತನ ಆಲಯದಿಂದ ಕರ ತಂದನು. ಅವರು ಎತ್ತರವಾದ ಬಾಗಲಿನಿಂದ ಅರಸನ ಮನೆಗೆ ಬಂದು ಅರಸನನ್ನು ರಾಜ್ಯದ ಸಿಂಹಾಸನದ ಮೇಲೆ ಕೂಡ್ರಿಸಿದರು.ಅವರು ಅತಲ್ಯಳನ್ನು ಕತ್ತಿ ಯಿಂದ ಕೊಂದ ತರುವಾಯ ದೇಶದ ಜನರೆಲ್ಲರೂ ಸಂತೋಷಪಟ್ಟರು, ಪಟ್ಟಣವು ಶಾಂತವಾಯಿತು.
23:21b.2CH.023.021 ಅವರು ಅತಲ್ಯಳನ್ನು ಕತ್ತಿ ಯಿಂದ ಕೊಂದ ತರುವಾಯ ದೇಶದ ಜನರೆಲ್ಲರೂ ಸಂತೋಷಪಟ್ಟರು, ಪಟ್ಟಣವು ಶಾಂತವಾಯಿತು.
24
24:1b.2CH.024.001 ಯೆಹೋವಾಷನು ಆಳಲು ಆರಂಭಿಸಿದಾಗ ಏಳು ವರುಷದವನಾಗಿದ್ದು ಯೆರೂ ಸಲೇಮಿನಲ್ಲಿ ನಾಲ್ವತ್ತು ವರುಷ ಆಳಿದನು. ಅವನ ತಾಯಿ ಬೇರ್ಷೆಬ ಊರಿನವಳಾದ ಚಿಬ್ಯಳೆಂಬವಳು.
24:2b.2CH.024.002 ಯೆಹೋವಾಷನು ಯಾಜಕನಾದ ಯೆಹೋಯಾ ದನ ಸಮಸ್ತ ದಿವಸಗಳಲ್ಲಿ ಕರ್ತನ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು.
24:3b.2CH.024.003 ಯೆಹೋಯಾ ದನು ಅವನಿಗೋಸ್ಕರ ಇಬ್ಬರು ಹೆಂಡತಿಯರನ್ನು ತಕ್ಕೊಂಡನು. ಅವನು ಕುಮಾರರನ್ನೂ ಕುಮಾರ್ತೆ ಯರನ್ನೂ ಪಡೆದನು.
24:4b.2CH.024.004 ಇದರ ತರುವಾಯ ಏನಾಯಿತಂದರೆ, ಯೆಹೋ ವಾಷನು ಕರ್ತನ ಆಲಯವನ್ನು ದುರಸ್ತು ಮಾಡುವ ಮನಸ್ಸುಳ್ಳವನಾಗಿದ್ದನು.
24:5b.2CH.024.005 ಆದದರಿಂದ ಅವನು ಯಾಜ ಕರನ್ನೂ ಲೇವಿಯರನ್ನೂ ಕೂಡಿಸಿಕೊಂಡು ಅವರಿಗೆನೀವು ಯೆಹೂದ ಪಟ್ಟಣಗಳಿಗೆ ಹೊರಟು ಹೋಗಿ ವರುಷ ವರುಷಕ್ಕೆ ನಿಮ್ಮ ದೇವರ ಆಲಯವನ್ನು ದುರಸ್ತು ಮಾಡುವದಕ್ಕೆ ಸಮಸ್ತ ಇಸ್ರಾಯೇಲ್ಯರಿಂದ ಹಣವನ್ನು ಕೂಡಿಸಿರಿ. ಕೆಲಸವನ್ನು ಶೀಘ್ರವಾಗಿ ನಡಿಸಿರಿ ಅಂದನು. ಆದಾಗ್ಯೂ ಲೇವಿಯರು ಅವಸರ ಮಾಡದೆ ಇದ್ದರು.
24:6b.2CH.024.006 ಆಗ ಅರಸನು ಮುಖ್ಯಸ್ಥನಾದ ಯೆಹೋ ಯಾದನನ್ನು ಕರೇಕಳುಹಿಸಿ ಅವನಿಗೆ--ಕರ್ತನ ಸೇವಕ ನಾದ ಮೋಶೆಯೂ ಇಸ್ರಾಯೇಲಿನ ಸಭೆಯೂ ಸಾಕ್ಷಿಯ ಗುಡಾರದ ನಿಮಿತ್ತ ಆಜ್ಞಾಪಿಸಿದ ಕಾಣಿಕೆ ಯನ್ನು ಯೆಹೂದದಿಂದಲೂ ಯೆರೂಸಲೇಮಿ ನಿಂದಲೂ ಬರುವಂತೆ ಮಾಡಲು ನೀನು ಲೇವಿಯ ರನ್ನು ಯಾಕೆ ವಿಚಾರಿಸಲಿಲ್ಲ?
24:7b.2CH.024.007 ಯಾಕಂದರೆ ಆ ದುಷ್ಟ ಸ್ತ್ರೀಯಾದ ಅತಲ್ಯಳ ಕುಮಾರರು ಕರ್ತನ ಆಲಯವನ್ನು ಒಡೆದು ಬಿಟ್ಟು ಕರ್ತನ ಆಲಯಕ್ಕೆ ಪ್ರತಿಷ್ಠೆಮಾಡಿ ದವುಗಳನ್ನೆಲ್ಲಾ ಬಾಳನಿಗೆ ಕೊಟ್ಟರು ಅಂದನು.
24:8b.2CH.024.008 ಅರ ಸನ ಆಜ್ಞೆಯ ಮೇರೆಗೆ ಅವರು ಒಂದು ಪೆಟ್ಟಿಗೆಯನ್ನು ಮಾಡಿ ಕರ್ತನ ಆಲಯದ ಬಾಗಲಿನ ಹೊರಗೆ ಇಟ್ಟರು.
24:9b.2CH.024.009 ದೇವರ ಸೇವಕನಾದ ಮೋಶೆಯು ಅರಣ್ಯ ದಲ್ಲಿ ಇಸ್ರಾಯೇಲ್ಯರಿಗೆ ಆಜ್ಞಾಪಿಸಿದ ಕಾಣಿಕೆಯನ್ನು ಕರ್ತನಿಗೆ ತರಬೇಕೆಂದು ಯೆಹೂದದಲ್ಲಿಯೂ ಯೆರೂ ಸಲೇಮಿನಲ್ಲಿಯೂ ಪ್ರಕಟಮಾಡಿದರು.
24:10b.2CH.024.010 ಆಗ ಎಲ್ಲಾ ಪ್ರಧಾನರೂ ಜನರೂ ಸಂತೋಷಪಟ್ಟು ತಕ್ಕೊಂಡು ಒಂದು ಪೆಟ್ಟಿಗೆಯೊಳಗೆ ತುಂಬುವಷ್ಟು ಹಾಕಿದರು.
24:11b.2CH.024.011 ಪೆಟ್ಟಿಗೆಯು ಲೇವಿಯರ ಕೈಯಿಂದ ಅರಸನ ಆಸ್ಥಾನಕ್ಕೆ ತರಲ್ಪಟ್ಟಾಗ ಅದರಲ್ಲಿ ಬಹಳ ಹಣ ಕಾಣಿಸಿದ್ದರಿಂದ ಅರಸನ ಶಾಸ್ತ್ರಿಯೂ ಪ್ರಧಾನ ಯಾಜಕನ ಪರಿಚಾರ ಕನೂ ಬಂದು ಪೆಟ್ಟಿಗೆಯನ್ನು ಬರಿದುಮಾಡಿ ತಕ್ಕೊಂಡು ತಿರಿಗಿ ಅದರ ಸ್ಥಳಕ್ಕೆ ಒಯ್ದಿಟ್ಟರು. ಹೀಗೆಯೇ ಅವರು ಪ್ರತಿದಿನ ಮಾಡಿ ಹಣವನ್ನು ಬಹಳ ಕೂಡಿಸಿದರು.
24:12b.2CH.024.012 ಆಗ ಅರಸನೂ ಯೆಹೋಯಾದನೂ ಅದನ್ನು ಕರ್ತನ ಆಲಯದ ಸೇವೆಯ ಕಾರ್ಯವನ್ನು ಮಾಡುವ ವರಿಗೆ ಕೊಟ್ಟು ಅವರಿಂದ ಮಾಡಿಸಿದನು. ಕರ್ತನ ಆಲಯವನ್ನು ದುರಸ್ತು ಪಡಿಸುವ ನಿಮಿತ್ತ ಕಲ್ಲು ಕಡಿಯುವವರನ್ನೂ ಬಡಿಗಿಯವರನ್ನೂ ಕೂಲಿಗೆ ಕರ ಕೊಂಡರು. ಕರ್ತನ ಆಲಯವನ್ನು ಭದ್ರಮಾಡುವ ನಿಮಿತ್ತ ಕಬ್ಬಿಣ ಹಿತ್ತಾಳೆ ಕೆಲಸ ಮಾಡುವವರನ್ನು ಕೂಲಿಗೆ ಕರಕೊಂಡರು.
24:13b.2CH.024.013 ಹೀಗೆಯೇ ಕೆಲಸದವರು ಕೆಲಸವನ್ನು ನಡಿಸಿದ್ದರಿಂದ ಕೆಲಸವು ಅವರ ಕೈಯಿಂದ ಪೂರ್ಣ ವಾಯಿತು, ಅವರು ಕರ್ತನ ಆಲಯವನ್ನು ಇದ್ದ ಸ್ಥಿತಿಯಲ್ಲಿ ನಿಲ್ಲಿಸಿ ಅದನ್ನು ಬಲಪಡಿಸಿದರು.
24:14b.2CH.024.014 ಅವರು ಅದನ್ನು ಮುಗಿಸಿದ ಮೇಲೆ ಮಿಕ್ಕ ಹಣವನ್ನು ಅರ ಸನ ಮುಂದೆಯೂ ಯೆಹೋಯಾದನ ಮುಂದೆಯೂ ತಂದರು. ಅದರಿಂದ ಕರ್ತನ ಆಲಯಕ್ಕೋಸ್ಕರ ಬಂಗಾ ರದ ಬೆಳ್ಳಿಪಾತ್ರೆಗಳಾದ ಸೇವೆಯ ಪಾತ್ರೆಗಳೂ ಅರ್ಪಣೆಯ ಪಾತ್ರೆಗಳೂ ಸೌಟುಗಳೂ ಮಾಡಲ್ಪ ಟ್ಟವು. ಯೆಹೋಯಾದನ ಸಮಸ್ತ ದಿವಸಗಳಲ್ಲಿ ಯಾವಾಗಲೂ ಕರ್ತನ ಆಲಯದಲ್ಲಿ ದಹನಬಲಿ ಗಳನ್ನು ಅರ್ಪಿಸಿದರು.
24:15b.2CH.024.015 ಯೆಹೋಯಾದನು ಮುದುಕನಾಗಿ ದಿವಸಗಳು ತುಂಬಿ ಸತ್ತುಹೋದನು. ಅವನು ಸಾಯುವಾಗ ನೂರ ಮೂವತ್ತು ವರುಷಗಳುಳ್ಳವನಾಗಿದ್ದನು.
24:16b.2CH.024.016 ಅವನು ದೇವರಿಗೋಸ್ಕರವಾಗಿಯೂ ಆತನ ಆಲಯಕ್ಕೋಸ್ಕರ ವಾಗಿಯೂ ಇಸ್ರಾಯೇಲಿನಲ್ಲಿ ಒಳ್ಳೇದನ್ನು ಮಾಡಿ ದ್ದದ್ದರಿಂದ ಅವರು ಅವನನ್ನು ದಾವೀದನ ಪಟ್ಟಣ ದಲ್ಲಿ ಅರಸುಗಳ ಬಳಿಯಲ್ಲಿ ಹೂಣಿಟ್ಟರು.
24:17b.2CH.024.017 ಆದರೆ ಯೆಹೋಯಾದನು ಸತ್ತತರುವಾಯ ಯೆಹೂದದ ಪ್ರಧಾನರು ಬಂದು ಅರಸನಿಗೆ ಅಡ್ಡ ಬಿದ್ದರು. ಆಗ ಅರಸನು ಅವರ ಮಾತನ್ನು ಕೇಳಿದನು.
24:18b.2CH.024.018 ಅವರು ತಮ್ಮ ಪಿತೃಗಳ ದೇವರಾದ ಕರ್ತನ ಆಲಯವನ್ನು ಬಿಟ್ಟು ತೋಪುಗಳನ್ನೂ ವಿಗ್ರಹಗಳನ್ನೂ ಸೇವಿಸಿದರು. ಆದಕಾರಣ ಅವರ ಈ ಅಪರಾಧದ ನಿಮಿತ್ತ ಯೆಹೂದ ಮತ್ತು ಯೆರೂಸಲೇಮಿನ ಮೇಲೆ ರೌದ್ರ ಬಂತು.
24:19b.2CH.024.019 ಆದಾಗ್ಯೂ ಕರ್ತನು ತನ್ನ ಕಡೆಗೆ ಅವರನ್ನು ತಿರುಗಿಸುವದಕ್ಕೆ ಪ್ರವಾದಿಗಳನ್ನು ಅವರ ಬಳಿಗೆ ಕಳುಹಿಸಿದನು; ಇವರು ಅವರಿಗೆ ಸಾಕ್ಷಿಯಾಗಿ ಹೇಳಿದರು; ಆದರೆ ಅವರು ಕಿವಿಗೊಡದೆ ಹೋದರು.
24:20b.2CH.024.020 ಆಗ ದೇವರ ಆತ್ಮನು ಯಾಜಕನಾಗಿ ರುವ ಯೆಹೋಯಾದನ ಮಗನಾದ ಜೆಕರ್ಯನ ಮೇಲೆ ಬಂದನು. ಅವನು ಜನರೊಳಗೆ ಎತ್ತರವಾದ ಸ್ಥಳದಲ್ಲಿ ನಿಂತು ಅವರಿಗೆ--ನೀವು ವೃದ್ಧಿಹೊಂದ ಕೂಡದ ಹಾಗೆ ಕರ್ತನ ಆಜ್ಞೆಗಳನ್ನು ವಿಾರುವದೇನು? ನೀವು ಕರ್ತನನ್ನು ಬಿಟ್ಟದ್ದರಿಂದ ಆತನು ನಿಮ್ಮನ್ನು ಬಿಟ್ಟಿದ್ದಾನೆಂದು ಕರ್ತನು ಹೇಳುತ್ತಾನೆ ಅಂದನು.
24:21b.2CH.024.021 ಆದದರಿಂದ ಅವರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ಕರ್ತನ ಆಲಯದ ಅಂಗಳದಲ್ಲಿ ಅರಸನ ಅಪ್ಪಣೆಯಂತೆ ಅವನನ್ನು ಕಲ್ಲೆಸೆದು ಕೊಂದರು.
24:22b.2CH.024.022 ಹಾಗೆಯೇ ಇವನ ತಂದೆಯಾದ ಯೆಹೋಯಾದನು ತನಗೆ ತೋರಿಸಿದ ಕೃಪೆಯನ್ನು ಜ್ಞಾಪಕಮಾಡದೆ ಅರಸನಾದ ಯೆಹೋವಾಷನು ಅವನ ಮಗನನ್ನು ಕೊಂದುಹಾಕಿದನು. ಇವನು ಸಾಯುವಾಗ--ಕರ್ತನು ನೋಡಿ ವಿಚಾರಿಸಲಿ ಎಂದು ಹೇಳಿದನು.
24:23b.2CH.024.023 ವರುಷಾಂತ್ಯದಲ್ಲಿ ಏನಾಯಿತಂದರೆ, ಅರಾಮಿನ ಸೈನ್ಯದವರು ಅವನಿಗೆ ವಿರೋಧವಾಗಿ ಹೊರಟು ಯೆಹೂದಕ್ಕೂ ಯೆರೂಸಲೇಮಿಗೂ ಬಂದು ಜನರ ಪ್ರಧಾನರನ್ನು ಅವರೊಳಗಿಂದ ನಾಶಮಾಡಿ ಅವರಿಂದ ತೆಗೆದುಕೊಂಡ ಕೊಳ್ಳೆಯನ್ನೆಲ್ಲಾ ದಮಸ್ಕದ ಅರಸನಿಗೆ ಕಳುಹಿಸಿದರು.
24:24b.2CH.024.024 ಅವರು ತಮ್ಮ ಪಿತೃಗಳ ದೇವರಾದ ಕರ್ತನನ್ನು ಬಿಟ್ಟದ್ದರಿಂದ ಅರಾಮ್ಯರು ಅಲ್ಪಜನವಾದ ಸೈನ್ಯದ ಸಂಗಡ ಬಂದಾಗ ಕರ್ತನು ಬಹು ಅಧಿಕ ವಾದ ಸೈನ್ಯವನ್ನು ಅವರ ಕೈಯಲ್ಲಿ ಒಪ್ಪಿಸಿದನು. ಹೀಗೆ ಅವರು ಯೆಹೋವಾಷನಿಗೆ ವಿರೋಧವಾಗಿ ನ್ಯಾಯ ತೀರ್ವಿಕೆ ಮಾಡಿದರು. ಅವನು ಕಠಿಣ ರೋಗದಲ್ಲಿ ಬಿದ್ದಿರುವಾಗ ಅವನನ್ನು ಬಿಟ್ಟುಹೋದರು.
24:25b.2CH.024.025 ಅವರು ಅವನನ್ನು ಬಿಟ್ಟತರುವಾಯ ಯಾಜಕನಾದ ಯೆಹೋ ಯಾದನ ಮಕ್ಕಳ ರಕ್ತಾಪರಾಧದ ನಿಮಿತ್ತವಾಗಿ ಅವನ ಸ್ವಂತ ಸೇವಕರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ಅವನು ಸಾಯುವ ಹಾಗೆ ಅವನ ಮಂಚದ ಮೇಲೆ ಅವನನ್ನು ಕೊಂದುಹಾಕಿದರು. ಅವರು ಅವ ನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಅರಸುಗಳ ಸಮಾಧಿಗಳ ಬಳಿಯಲ್ಲಿ ಅವನನ್ನು ಹೂಣಿ ಡಲಿಲ್ಲ.
24:26b.2CH.024.026 ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ದವರಾರಂದರೆ, ಅಮ್ಮೋನ್ಯಳಾಗಿರುವ ಶಿಮ್ಗಾಳ ಮಗ ನಾದ ಜಾಬಾದನು, ಮೋವಾಬ್ಯಳಾಗಿರುವ ಶಿವ್ರೆಾ ತಳ ಮಗನಾದ ಯೆಹೋಜಾಬಾದನು.ಆದರೆ ಅವನ ಕುಮಾರರನ್ನು ಕುರಿತೂ ಅವನ ಮೇಲೆ ಹಾಕಿದ ಭಾರಗಳನ್ನು ಕುರಿತೂ ದೇವರ ಆಲಯ ದುರಸ್ತು ಮಾಡುವದನ್ನು ಕುರಿತೂ ಇಗೋ, ಅವು ಅರಸುಗಳ ಚರಿತ್ರೆಯ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. ಅವನ ಮಗ ನಾದ ಅಮಚ್ಯನು ಅವನಿಗೆ ಬದಲಾಗಿ ಆಳಿದನು.
24:27b.2CH.024.027 ಆದರೆ ಅವನ ಕುಮಾರರನ್ನು ಕುರಿತೂ ಅವನ ಮೇಲೆ ಹಾಕಿದ ಭಾರಗಳನ್ನು ಕುರಿತೂ ದೇವರ ಆಲಯ ದುರಸ್ತು ಮಾಡುವದನ್ನು ಕುರಿತೂ ಇಗೋ, ಅವು ಅರಸುಗಳ ಚರಿತ್ರೆಯ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. ಅವನ ಮಗ ನಾದ ಅಮಚ್ಯನು ಅವನಿಗೆ ಬದಲಾಗಿ ಆಳಿದನು.
25
25:1b.2CH.025.001 ಅಮಚ್ಯನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂ ಸಲೇಮಿನಲ್ಲಿ ಇಪ್ಪತ್ತೊಂಭತ್ತು ವರುಷ ಆಳಿದನು. ಅವನ ತಾಯಿಯ ಹೆಸರು ಯೆಹೋವದ್ದಾನಳು; ಈಕೆಯು ಯೆರೂಸಲೇಮಿನವಳಾಗಿದ್ದಳು.
25:2b.2CH.025.002 ಅವನು ಕರ್ತನ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು; ಆದರೆ ಪೂರ್ಣಹೃದಯದಿಂದಲ್ಲ.
25:3b.2CH.025.003 ರಾಜ್ಯವು ಅವನಿಗೆ ಸ್ಥಿರಮಾಡಲ್ಪಟ್ಟ ತರುವಾಯ ಅವನು ಅರಸನಾದ ತನ್ನ ತಂದೆಯನ್ನು ಸಂಹರಿಸಿದ ತನ್ನ ಸೇವಕರನ್ನು ಕೊಂದುಹಾಕಿದನು.
25:4b.2CH.025.004 ಆದರೆ ತಂದೆಗಳು ಮಕ್ಕಳಿ ಗೋಸ್ಕರ ಸಾಯುವದಿಲ್ಲ, ಮಕ್ಕಳು ತಂದೆಗಳಿಗೋಸ್ಕರ ಸಾಯುವದಿಲ್ಲ; ಪ್ರತಿ ಮನುಷ್ಯನು ತನ್ನ ಪಾಪದಲ್ಲಿ ಸಾಯಬೇಕೆಂದು ಕರ್ತನು ಆಜ್ಞಾಪಿಸಿದ್ದು ಮೋಶೆಯ ನ್ಯಾಯಪ್ರಮಾಣದ ಪುಸ್ತಕದಲ್ಲಿ ಬರೆಯಲ್ಪಟ್ಟ ಹಾಗೆ ಅವನು ಅವರ ಮಕ್ಕಳನ್ನು ಕೊಲ್ಲಲಿಲ್ಲ.
25:5b.2CH.025.005 ಇದಲ್ಲದೆ ಅಮಚ್ಯನು ಯೆಹೂದದವರನ್ನು ಕೂಡಿಸಿ ಕೊಂಡು ಯೆಹೂದ ಬೆನ್ಯಾವಿಾನ್ಯರೆಲ್ಲರಲ್ಲಿ ತಮ್ಮ ಪಿತೃ ಗಳ ಮನೆಗಳ ಪ್ರಕಾರ ಅವರನ್ನು ಸಹಸ್ರಗಳ ಮೇಲೆ ಅಧಿಪತಿಗಳಾಗಿಯೂ ಶತಗಳ ಮೇಲೆ ಅಧಿಪತಿಗಳಾ ಗಿಯೂ ಮಾಡಿದನು. ಅವನು ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ಪ್ರಾಯವುಳ್ಳವರನ್ನು ಲೆಕ್ಕಿಸಿ ಆದುಕೊಂಡಂಥ, ಯುದ್ಧಕ್ಕೆ ಹೋಗತಕ್ಕಂಥ, ಈಟಿಯನ್ನೂ ಖೇಡ್ಯವನ್ನೂ ಹಿಡಿದುಕೊಂಡಿರುವಂಥ ಮೂರು ಲಕ್ಷ ಮಂದಿಯನ್ನು ಕಂಡನು.
25:6b.2CH.025.006 ಇದಲ್ಲದೆ ಇಸ್ರಾಯೇಲಿನವರಲ್ಲಿ ನೂರು ಬೆಳ್ಳಿ ತಲಾಂತುಗಳಿಂದ ಪರಾಕ್ರಮಶಾಲಿಗಳಾದ ಒಂದು ಲಕ್ಷ ಮಂದಿಯನ್ನು ಕೂಲಿಗೆ ತೆಗೆದುಕೊಂಡನು.
25:7b.2CH.025.007 ಆಗ ದೇವರ ಮನುಷ್ಯ ನಾದ ಒಬ್ಬನು ಅವನ ಬಳಿಗೆ ಬಂದು ಅವನಿಗೆಅರಸನೇ, ಇಸ್ರಾಯೇಲಿನ ಸೈನ್ಯವು ನಿನ್ನ ಸಂಗಡ ಹೋಗದೆ ಇರಲಿ; ಯಾಕಂದರೆ ಕರ್ತನು ಇಸ್ರಾಯೇ ಲ್ಯರಾದ ಎಫ್ರಾಯಾಮನ ಸಮಸ್ತ ಮಕ್ಕಳ ಸಂಗಡ ಇರುವದಿಲ್ಲ.
25:8b.2CH.025.008 ನೀನು ಹೋದರೆ ಹೋಗು ಅದನ್ನು ಮಾಡು; ಯುದ್ಧಕ್ಕೆ ಬಲಗೊಳ್ಳು. ದೇವರು ಶತ್ರುವಿನ ಮುಂದೆ ನಿನ್ನನ್ನು ಬೀಳಮಾಡುವನು; ಯಾಕಂದರೆ ಸಹಾಯ ಕೊಡುವದಕ್ಕೂ ಬೀಳಮಾಡುವದಕ್ಕೂ ದೇವರಿಗೆ ಶಕ್ತಿ ಉಂಟು ಅಂದನು.
25:9b.2CH.025.009 ಆಗ ಅಮಚ್ಯನು ದೇವರ ಮನುಷ್ಯನಿಗೆ--ಆದರೆ ಇಸ್ರಾಯೇಲಿನ ದಂಡಿಗೆ ನಾನು ಕೊಟ್ಟ ನೂರು ತಲಾಂತುಗಳಿಗೋಸ್ಕರ ಏನು ಮಾಡಬೇಕು ಅಂದನು. ಅದಕ್ಕೆ ದೇವರ ಮನುಷ್ಯನು--ಕರ್ತನು ಇದಕ್ಕಿಂತ ಅಧಿಕವಾಗಿ ನಿನಗೆ ಕೊಡಲು ಶಕ್ತನು ಅಂದನು.
25:10b.2CH.025.010 ಆಗ ಅಮಚ್ಯನು ಎಫ್ರಾಯಾಮಿನಿಂದ ತನ್ನ ಬಳಿಗೆ ಬಂದ ಸೈನಿಕರು ತಮ್ಮ ಸ್ಥಳಕ್ಕೆ ತಿರಿಗಿ ಹೋಗುವ ಹಾಗೆ ಅವರನ್ನು ಪ್ರತ್ಯೇಕಿಸಿದನು. ಆದ ಕಾರಣ ಅವರ ಕೋಪವು ಯೆಹೂದದ ಮೇಲೆ ಬಹಳವಾಗಿ ಉರಿಯಿತು. ಅವರು ಕೋಪದ ಉರಿಯಿಂದ ತಮ್ಮ ಮನೆಗೆ ತಿರುಗಿದರು.
25:11b.2CH.025.011 ಅಮಚ್ಯನು ತನ್ನನ್ನು ಬಲಪಡಿಸಿ ತನ್ನ ಜನರನ್ನು ನಡಿಸಿಕೊಂಡು ಉಪ್ಪಿನ ತಗ್ಗಿಗೆ ಹೋಗಿ ಅಲ್ಲಿ ಸೇಯಾ ರಿನ ಮಕ್ಕಳೊಳಗೆ ಹತ್ತು ಸಾವಿರ ಮಂದಿಯನ್ನು ಹೊಡೆದನು.
25:12b.2CH.025.012 ಬದುಕಿದ್ದ ಬೇರೆ ಹತ್ತು ಸಾವಿರ ಮಂದಿಯನ್ನು ಯೆಹೂದನ ಮಕ್ಕಳು ಸೆರೆಯಾಗಿ ಒಯ್ದು ಬಂಡೆಯ ಶಿಖರಕ್ಕೆ ಅವರನ್ನು ಕರಕೊಂಡು ಹೋಗಿ ಬಂಡೆಯ ಶಿಖರದಿಂದ ಅವರನ್ನು ದೊಬ್ಬಿದರು. ಆದ ದರಿಂದ ಜನರೆಲ್ಲರು ತುಂಡುತುಂಡಾದರು.
25:13b.2CH.025.013 ಆದರೆ ಅವರು ತಮ್ಮ ಸಂಗಡ ಯುದ್ಧಕ್ಕೆ ಹೋಗದ ಹಾಗೆ ಅಮಚ್ಯನು ಹಿಂದಕ್ಕೆ ಕಳುಹಿಸಿದ ಗುಂಪಿನವರು ಯೆಹೂದದ ಪಟ್ಟಣಗಳ ಮೇಲೆ ಬಿದ್ದು ಸಮಾರ್ಯ ಮೊದಲುಗೊಂಡು ಬೇತ್ಹೋರೋನಿನ ಮಟ್ಟಿಗೂ ಮೂರು ಸಾವಿರ ಮಂದಿಯನ್ನು ಹೊಡೆದುಬಿಟ್ಟು ಬಹುಕೊಳ್ಳೆಯನ್ನು ತೆಗೆದುಕೊಂಡರು.
25:14b.2CH.025.014 ಅಮಚ್ಯನು ಎದೋಮ್ಯರನ್ನು ಹೊಡೆದು ತಿರಿಗಿ ಬಂದ ತರುವಾಯ ಏನಾಯಿತಂದರೆ, ತಾನು ಸೇಯಾ ರನ ಮಕ್ಕಳ ದೇವರುಗಳನ್ನು ತಕ್ಕೊಂಡು ಬಂದು ಅವು ತನಗೆ ದೇವರುಗಳಾಗಿರುವ ಹಾಗೆ ನಿಲ್ಲಿಸಿಕೊಂಡು ಅವುಗಳ ಮುಂದೆ ಅಡ್ಡಬಿದ್ದು ಅವುಗಳಿಗೆ ಧೂಪವನ್ನು ಸುಟ್ಟನು.
25:15b.2CH.025.015 ಆದಕಾರಣ ಕರ್ತನ ಕೋಪವು ಅಮಚ್ಯನ ಮೇಲೆ ಹೊತ್ತಿತು; ಆತನು ಅವನ ಬಳಿಗೆ ಪ್ರವಾದಿ ಯನ್ನು ಕಳುಹಿಸಿದನು. ಅವನು ಅವನಿಗೆ--ತಮ್ಮ ಜನ ರನ್ನು ನಿನ್ನ ಕೈಯಿಂದ ತಪ್ಪಿಸಲಾರದ ದೇವರುಗಳನ್ನು ನೀನು ಹುಡುಕುವದೇನು ಅಂದನು.
25:16b.2CH.025.016 ಅವನು ಅರ ಸನ ಸಂಗಡ ಮಾತನಾಡುತ್ತಿರುವಾಗ ಅರಸನು ಅವ ನಿಗೆ--ಅರಸನ ಯೋಚನಾಕರ್ತರಲ್ಲಿ ನೀನು ಒಬ್ಬ ನಾಗಿದ್ದೀಯೋ? ನೀನು ಯಾಕೆ ಹೊಡೆಯಲ್ಪಡಬೇಕು ಅಂದನು. ಆಗ ಪ್ರವಾದಿಯು--ನೀನು ನನ್ನ ಯೋಚನೆ ಯನ್ನು ಕೇಳದೆ ಇದನ್ನು ಮಾಡಿದ್ದರಿಂದ ದೇವರು ನಿನ್ನನ್ನು ನಾಶಮಾಡಲು ತೀರ್ಮಾನಿಸಿದ್ದಾನೆಂದು ನಾನು ಬಲ್ಲೆನು ಎಂದು ಹೇಳಿಬಿಟ್ಟನು.
25:17b.2CH.025.017 ಆಗ ಯೆಹೂದದ ಅರಸನಾದ ಅಮಚ್ಯನು ಆಲೋಚನೆ ಕೇಳಿ, ಇಸ್ರಾಯೇಲಿನ ಅರಸನಾದ ಯೇಹುವಿನ ಮಗನಾದ ಯೆಹೋವಾಹಾಜನ ಮಗ ನಾದ ಯೋವಾಷನಿಗೆ--ನಾವು ಒಬ್ಬರ ಮುಖ ವನ್ನು ಒಬ್ಬರು ನೋಡೋಣ ಬಾ ಎಂದು ಹೇಳಿ ಕಳುಹಿಸಿದನು.
25:18b.2CH.025.018 ಆದರೆ ಇಸ್ರಾಯೇಲಿನ ಅರಸ ನಾದ ಯೋವಾಷನು ಯೆಹೂದದ ಅರಸನಾಗಿರುವ ಅಮಚ್ಯನಿಗೆ--ಲೆಬನೋನಿನಲ್ಲಿದ್ದ ಒಂದು ಮುಳ್ಳು ಗಿಡವು ಲೆಬನೋನಿನಲ್ಲಿರುವ ದೇವದಾರಿಗೆ--ನೀನು ನನ್ನ ಮಗನಿಗೆ ಹೆಂಡತಿಯಾಗಿರಲು ನಿನ್ನ ಮಗಳನ್ನು ಕೊಡು ಎಂದು ಹೇಳಿ ಕಳುಹಿಸಿತು. ಆದರೆ ಲೆಬನೋ ನಿನಲ್ಲಿದ್ದ ಅಡವಿಯ ಮೃಗವು ಹಾದುಹೋಗುತ್ತಿರು ವಾಗ ಆ ಮುಳ್ಳು ಗಿಡವನ್ನು ತುಳಿಯಿತು.
25:19b.2CH.025.019 ಇಗೋನಾನು ಎದೋಮ್ಯರನ್ನು ಹೊಡೆದಿದ್ದೇನೆಂದು ಹೇಳಿ ಕೊಳ್ಳುತ್ತೀ; ಆದದರಿಂದ ನಿನ್ನ ಹೃದಯವು ನಿನ್ನನ್ನು ಅಹಂಕಾರದಿಂದ ಕೊಚ್ಕಿಕೊಳ್ಳುವಂತೆ ಮಾಡುತ್ತದೆ. ಈಗ ಮನೆಯಲ್ಲಿ ಕೂತಿರು. ನೀನೂ ನಿನ್ನ ಸಂಗಡ ಯೆಹೂದವೂ ಬಿದ್ದು ಹೋಗುವ ಹಾಗೆ ನಿನ್ನ ಕೇಡಿಗೆ ನೀನು ಕೈ ಹಾಕುವದೇನು ಅಂದನು.
25:20b.2CH.025.020 ಆದರೆ ಅಮ ಚ್ಯನು ಕೇಳದೆಹೋದನು. ಯಾಕಂದರೆ ಅವರು ಎದೋ ಮ್ಯರ ದೇವರುಗಳನ್ನು ಹುಡುಕಿದ ನಿಮಿತ್ತ ಅವರನ್ನು ಶತ್ರುಗಳ ಕೈಯಲ್ಲಿ ಒಪ್ಪಿಸುವ ಹಾಗೆ ಇದು ದೇವರಿಂದ ಆಯಿತು.
25:21b.2CH.025.021 ಹಾಗೆಯೇ ಇಸ್ರಾಯೇಲಿನ ಅರಸನಾದ ಯೋವಾಷನು ಹೊರಟು ಹೋದನು; ಅವನೂ ಯೆಹೂದದ ಅರಸನಾದ ಅಮಚ್ಯನೂ ಯೆಹೂದಕ್ಕೆ ಸೇರಿದ ಬೇತ್ಷೆಮೆಷಿನ ಬಳಿಯಲ್ಲಿ ಅವರು ಒಬ್ಬನ ಮುಖವನ್ನು ಒಬ್ಬನು ನೋಡಿದನು.
25:22b.2CH.025.022 ಯೆಹೂದದ ವರು ಇಸ್ರಾಯೇಲಿನವರ ಮುಂದೆ ಸೋತು ತಮ್ಮತಮ್ಮ ಗುಡಾರಕ್ಕೆ ಓಡಿಹೋದರು.
25:23b.2CH.025.023 ಆಗ ಇಸ್ರಾಯೇಲಿನ ಅರಸನಾದ ಯೋವಾಷನು ಯೆಹೋವಾಹಾಜನ ಮಗನಾದ ಯೋವಾಷನ ಮಗನಾದ ಯೆಹೂದದ ಅರಸನಾಗಿರುವ ಅಮಚ್ಯನನ್ನು ಬೇತ್ಷೆಮೆಷಿನ ಬಳಿ ಯಲ್ಲಿ ಹಿಡಿದುಕೊಂಡು ಅವನನ್ನು ಯೆರೂಸಲೇಮಿಗೆ ತಕ್ಕೊಂಡು ಬಂದು ಯೆರೂಸಲೇಮಿನ ಗೋಡೆಯನ್ನು ಎಫ್ರಾಯಾಮನ ಬಾಗಲು ಮೊದಲುಗೊಂಡು ಮೂಲೆಯ ಬಾಗಲ ಮಟ್ಟಿಗೂ ನಾನೂರು ಮೊಳ ಉದ್ದ ಕೆಡವಿಬಿಟ್ಟು
25:24b.2CH.025.024 ಅವನು ಓಬೇದೆದೋಮನ ಬಳಿಯಲ್ಲಿ ಕರ್ತನ ಆಲಯದಲ್ಲಿ ಸಿಕ್ಕಿದ ಬೆಳ್ಳಿ ಬಂಗಾ ರವನ್ನು ಎಲ್ಲಾ ಸಾಮಾನುಗಳನ್ನು ಅರಸನ ಮನೆಯ ಬೊಕ್ಕಸಗಳನ್ನು ಕೆಲವರನ್ನು ಸೆರೆಹಿಡಿದು ತೆಗೆದು ಕೊಂಡು ಸಮಾರ್ಯಕ್ಕೆ ತಿರುಗಿಹೋದರು.
25:25b.2CH.025.025 ಯೆಹೂದದ ಅರಸನಾಗಿರುವ ಯೋವಾಷನ ಮಗನಾದ ಅಮಚ್ಯನು ಇಸ್ರಾಯೇಲಿನ ಅರಸನಾದ ಯೆಹೋವಾಹಾಜನ ಮಗನಾದ ಯೋವಾಷನು ಸತ್ತ ಮೇಲೆ ಹದಿನೈದು ವರುಷ ಬದುಕಿದನು.
25:26b.2CH.025.026 ಆದರೆ ಅಮಚ್ಯನ ಮಿಕ್ಕಾದ ಕ್ರಿಯೆಗಳು, ಮೊದಲನೆಯವು ಗಳೂ ಕಡೆಯವುಗಳೂ ಇಗೋ, ಅವು ಯೆಹೂದ ಇಸ್ರಾಯೇಲ್ಯರ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
25:27b.2CH.025.027 ಆದರೆ ಅಮಚ್ಯನು ಕರ್ತನ ಕಡೆಯಿಂದ ತೊಲಗಿಹೋದ ತರುವಾಯ ಅವರು ಯೆರೂಸಲೇಮಿ ನಲ್ಲಿ ಅವನ ಮೇಲೆ ಒಳಸಂಚು ಮಾಡಿದರು. ಆದ ಕಾರಣ ಅವನು ಲಾಕೀಷಿಗೆ ಓಡಿಹೋದನು; ಆದರೆ ಅವರು ಅವನ ಹಿಂದೆ ಲಾಕೀಷಿಗೆ ಕಳುಹಿಸಿ ಅಲ್ಲಿ ಅವನನ್ನು ಕೊಂದುಹಾಕಿದರು.ಅವರು ಅವನನ್ನು ಕುದುರೆಗಳ ಮೇಲೆ ತಕ್ಕೊಂಡು ಬಂದು ಯೆಹೂದದ ಪಟ್ಟಣದಲ್ಲಿ ಅವನ ಪಿತೃಗಳ ಬಳಿಯಲ್ಲಿ ಅವನನ್ನು ಹೂಣಿಟ್ಟರು.
25:28b.2CH.025.028 ಅವರು ಅವನನ್ನು ಕುದುರೆಗಳ ಮೇಲೆ ತಕ್ಕೊಂಡು ಬಂದು ಯೆಹೂದದ ಪಟ್ಟಣದಲ್ಲಿ ಅವನ ಪಿತೃಗಳ ಬಳಿಯಲ್ಲಿ ಅವನನ್ನು ಹೂಣಿಟ್ಟರು.
26
26:1b.2CH.026.001 ಆಗ ಯೆಹೂದ ಜನರೆಲ್ಲರು ಹದಿನಾರು ವರುಷದವನಾದ ಉಜ್ಜೀಯನನ್ನು ತಕ್ಕೊಂಡು ಅವನನ್ನು ಅವನ ತಂದೆಯಾದ ಅಮಚ್ಯ ನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು.
26:2b.2CH.026.002 ಅರಸನು ತನ್ನ ಪಿತೃಗಳ ಸಂಗಡ ಮಲಗಿದ ತರುವಾಯ ಇವನು ಎಲೋತನ್ನು ಕಟ್ಟಿಸಿ ಅದನ್ನು ಯೆಹೂದಕ್ಕೆ ತಿರಿಗಿ ಸೇರಿಸಿದನು.
26:3b.2CH.026.003 ಉಜ್ಜೀಯನು ಆಳಲು ಆರಂಭಿಸಿದಾಗ ಹದಿನಾರು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಐವತ್ತೆರಡು ವರುಷ ಆಳಿದನು. ಅವನ ತಾಯಿಯ ಹೆಸರು ಯೆಕೊಲ್ಯಳು; ಅವಳು ಯೆರೂಸಲೇಮಿನವ ಳಾಗಿದ್ದಳು.
26:4b.2CH.026.004 ಅವನು ತನ್ನ ತಂದೆಯಾದ ಅಮಚ್ಯನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಗೆ ಸರಿ ಯಾದದ್ದನ್ನು ಮಾಡಿದನು.
26:5b.2CH.026.005 ದೇವರ ದರ್ಶನಗಳಲ್ಲಿ ಗ್ರಹಿಕೆಯುಳ್ಳವನಾಗಿದ್ದ ಜೆಕರೀಯನ ದಿವಸಗಳಲ್ಲಿ ಅವನು ದೇವರನ್ನು ಹುಡುಕಿದನು. ಕರ್ತನನ್ನು ಹುಡು ಕುವ ದಿವಸಗಳ ಮಟ್ಟಿಗೂ ದೇವರು ಅವನನ್ನು ಅಭಿ ವೃದ್ಧಿಪಡಿಸಿದನು.
26:6b.2CH.026.006 ಅವನು ಹೊರಟುಹೋಗಿ ಫಿಲಿಷ್ಟಿಯರ ಮೇಲೆ ಯುದ್ಧಮಾಡಿ ಗತ್ ಗೋಡೆಯನ್ನೂ ಯಬ್ನೆಯ ಗೋಡೆಯನ್ನೂ ಅಷ್ಡೋದಿನ ಗೋಡೆಯನ್ನೂ ಕೆಡವಿ ಬಿಟ್ಟು ಫಿಲಿಷ್ಟಿಯರ ಮಧ್ಯದಲ್ಲಿ ಅಷ್ಡೋ ದಿನ ಬಳಿಯಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.
26:7b.2CH.026.007 ಇದ ಲ್ಲದೆ ಫಿಲಿಷ್ಟಿಯರ ಮೇಲೆಯೂ ಗೂರ್‌ಬಾಳಿನಲ್ಲಿ ವಾಸವಾಗಿದ್ದ ಅರಬ್ಬಿಯರ ಮೇಲೆಯೂ ಮೆಗೂನ್ಯರ ಮೇಲೆಯೂ ಅವನು ಯುದ್ಧಮಾಡಿ ದಾಗ ದೇವರು ಅವನಿಗೆ ಸಹಾಯಕೊಟ್ಟನು.
26:8b.2CH.026.008 ಇದಲ್ಲದೆ ಅಮ್ಮೋನ್ಯರು ಉಜ್ಜೀಯನಿಗೆ ಕಾಣಿಕೆ ಗಳನ್ನು ಕೊಟ್ಟರು. ಆದದರಿಂದ ಅವನ ಹೆಸರು ಐಗುಪ್ತದ ಮೇರೆಯ ವರೆಗೂ ಬಹಳವಾಗಿ ಹಬ್ಬಿತು. ಅವನು ತನ್ನನ್ನು ಬಹಳವಾಗಿ ಬಲಪಡಿಸಿಕೊಂಡನು.
26:9b.2CH.026.009 ಉಜ್ಜೀಯನು ಯೆರೂಸಲೇಮಿನಲ್ಲಿ ಮೂಲೆ ಬಾಗಲ ಬಳಿಯಲ್ಲಿಯೂ ತಗ್ಗಿನ ಬಾಗಲ ಬಳಿಯಲ್ಲಿಯೂ ಕೋಟೆಯ ಮೂಲೆಯಲ್ಲಿಯೂ ಬುರುಜುಗಳನ್ನು ಕಟ್ಟಿಸಿ ಅವುಗಳನ್ನು ಬಲಪಡಿಸಿದನು.
26:10b.2CH.026.010 ಅವನು ಅರಣ್ಯದಲ್ಲಿ ಬುರುಜುಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿ ದನು; ತಗ್ಗಿನ ದೇಶದಲ್ಲಿಯೂ ಬೈಲು ದೇಶದಲ್ಲಿಯೂ ಅವನಿಗೆ ಬಹು ಕುರಿದನಗಳಿದ್ದವು. ಹಾಗೆಯೇ ಪರ್ವತ ಗಳಲ್ಲಿಯೂ ಕರ್ಮೆಲಿನಲ್ಲಿಯೂ ಅವನಿಗೆ ಒಕ್ಕಲಿ ಗರೂ ದ್ರಾಕ್ಷೇ ವ್ಯವಸಾಯದವರೂ ಇದ್ದರು. ಅವನು ವ್ಯವಸಾಯದಲ್ಲಿ ಇಷ್ಟವುಳ್ಳವನಾಗಿದ್ದನು.
26:11b.2CH.026.011 ಇದಲ್ಲದೆ ಶಾಸ್ತ್ರಿಯಾದ ಯೆಗೀಯೇಲನ ಕೈ ಯಿಂದಲೂ ಅಧಿಪತಿಯಾದ ಮಾಸೇಯನ ಕೈ ಯಿಂದಲೂ ಬರೆಯಲ್ಪಟ್ಟ ಲೆಕ್ಕದ ಪ್ರಕಾರ ಗುಂಪು ಗುಂಪಾಗಿ ಯುದ್ಧಕ್ಕೆ ಹೋಗುವ ರಾಣುವೆಯವರ ಸೈನ್ಯವು ಉಜ್ಜೀಯನಿಗೆ ಇತ್ತು. ಆ ಸೈನ್ಯವು ಅರಸನ ಪ್ರಧಾನರಲ್ಲಿ ಒಬ್ಬನಾದ ಹನನ್ಯನ ಕೈಕೆಳಗೆ ಇತ್ತು.
26:12b.2CH.026.012 ಪರಾಕ್ರಮಶಾಲಿಗಳಲ್ಲಿ ಪಿತೃಗಳ ಮುಖ್ಯಸ್ಥರ ಲೆಕ್ಕವು ಎರಡು ಸಾವಿರದ ಆರುನೂರು ಮಂದಿಯು.
26:13b.2CH.026.013 ಅವರ ಕೈಕೆಳಗೆ ಅರಸನಿಗೆ ಸಹಾಯವಾಗಿ ಶತ್ರುವಿನ ಮೇಲೆ ಬಹಳ ಪರಾಕ್ರಮದಿಂದ ಯುದ್ಧಮಾಡುವ ಮೂರು ಲಕ್ಷದ ಏಳು ಸಾವಿರದ ಐನೂರು ಮಂದಿ ಯುಳ್ಳ ಸೈನ್ಯವಿತ್ತು.
26:14b.2CH.026.014 ಉಜ್ಜೀಯನು ಸಮಸ್ತ ದಂಡಿ ನಲ್ಲಿ ಅವರ ನಿಮಿತ್ತ ಗುರಾಣಿಗಳನ್ನು ಈಟಿಗಳನ್ನೂ ಶಿರಸ್ತ್ರಾಣಗಳನ್ನೂ ಉಕ್ಕಿನ ಕವಚಗಳನ್ನೂ ಬಿಲ್ಲುಗಳನ್ನೂ ಕವಣೆಗಳನ್ನೂ ಸಿದ್ಧಮಾಡಿದನು.
26:15b.2CH.026.015 ಇದಲ್ಲದೆ ಬಾಣಗಳನ್ನೂ ದೊಡ್ಡ ಕಲ್ಲುಗಳನ್ನೂ ಎಸೆಯುವ ನಿಮಿತ್ತ ಬುರುಜುಗಳ ಮೇಲೆಯೂ ಮಣ್ಣು ದಿಬ್ಬಗಳ ಮೇಲೆಯೂ ಇರಲು ಪ್ರವೀಣರಿಂದ ಮಾಡಿದ ಯಂತ್ರಗಳನ್ನೂ ಯೆರೂಸಲೇಮಿನಲ್ಲಿ ಮಾಡಿಸಿದನು. ಆದದರಿಂದ ಅವನ ಹೆಸರು ಬಹಳ ದೂರದ ವರೆಗೆ ಪ್ರಸಿದ್ಧಿಯಾಯಿತು. ಬಹು ಬಲವುಳ್ಳ ವನಾಗುವ ಪರ್ಯಂತರ ಅವನು ಬಹು ಆಶ್ಚರ್ಯ ವಾಗಿ ಸಹಾಯ ಹೊಂದಿದನು.
26:16b.2CH.026.016 ಆದರೆ ಅವನು ಬಲ ಹೊಂದಿದ ಮೇಲೆ ಅವನ ಹೃದಯವು ನಾಶನಕ್ಕೆ ಎತ್ತಲ್ಪಟ್ಟಿತು. ಏನಂದರೆ, ಅವನು ಧೂಪಪೀಠದ ಮೇಲೆ ಧೂಪ ಸುಡುವದಕ್ಕೆ ಕರ್ತನ ಆಲಯದಲ್ಲಿ ಪ್ರವೇಶಿಸಿ ತನ್ನ ದೇವರಾದ ಕರ್ತ ನಿಗೆ ವಿರೋಧವಾಗಿ ಅಪರಾಧ ಮಾಡಿದನು.
26:17b.2CH.026.017 ಆಗ ಯಾಜಕನಾದ ಅಜರ್ಯನು ಅವನ ಸಂಗಡ ಪರಾ ಕ್ರಮವುಳ್ಳ ಕರ್ತನ ಯಾಜಕರಾದ ಎಂಭತ್ತು ಮಂದಿಯು ಅರಸನಾದ ಉಜ್ಜೀಯನ ಹಿಂದೆ ಪ್ರವೇ ಶಿಸಿ ಅವನನ್ನು ಎದುರಿಸಿ--
26:18b.2CH.026.018 ಉಜ್ಜೀಯನೇ, ಕರ್ತ ನಿಗೆ ಧೂಪಸುಡುವದು ನಿನಗೆ ಸೇರಿದ್ದಲ್ಲ; ಧೂಪ ಸುಡುವದು ಪರಿಶುದ್ಧ ಮಾಡಲ್ಪಟ್ಟ ಯಾಜಕರಾದ ಆರೋನನ ಮಕ್ಕಳಿಗೆ ಸೇರಿದ್ದು; ನೀನು ಪರಿಶುದ್ಧ ಸ್ಥಾನದಿಂದ ಹೊರಟುಹೋಗು; ನೀನು ಅಪರಾಧ ಮಾಡಿದ್ದೀ. ದೇವರಾದ ಕರ್ತನಿಂದ ಇದು ನಿನಗೆ ಮಾನವಲ್ಲ ಅಂದರು.
26:19b.2CH.026.019 ಆಗ ಉಜ್ಜೀಯನು ಕೋಪಿಸಿ ಕೊಂಡನು; ಧೂಪವನ್ನು ಸುಡಲು ಅವನ ಕೈಯಲ್ಲಿ ಧೂಪಾರತಿ ಇತ್ತು. ಅವನು ಯಾಜಕರ ಮೇಲೆ ಕೋಪ ಮಾಡುವಾಗ ಕರ್ತನ ಮಂದಿರದಲ್ಲಿರುವ ಧೂಪಪೀಠದ ಬಳಿಯಲ್ಲಿ ನಿಂತ ಯಾಜಕರ ಮುಂದೆ ಅವನ ಹಣೆಯಲ್ಲಿ ಕುಷ್ಠವು ಎದ್ದಿತು.
26:20b.2CH.026.020 ಆಗ ಪ್ರಧಾನ ಯಾಜಕನಾದ ಅಜರ್ಯನೂ ಯಾಜಕರೆಲ್ಲರೂ ಅವ ನನ್ನು ದೃಷ್ಟಿಸಿದಾಗ ಇಗೋ, ಅವನು ತನ್ನ ಹಣೆ ಯಲ್ಲಿ ಕುಷ್ಠವುಳ್ಳವನಾಗಿದ್ದನು. ಆದದರಿಂದ ಅವರು ಅವನನ್ನು ಅಲ್ಲಿಂದ ದೊಬ್ಬಿಹಾಕಿದರು. ಕರ್ತನು ಅವ ನನ್ನು ಹೊಡೆದದ್ದರಿಂದ ಅವನು ಹೊರಗೆ ಹೋಗಲು ತ್ವರೆಪಟ್ಟನು.
26:21b.2CH.026.021 ಅರಸನಾದ ಉಜ್ಜೀಯನು ಸಾಯುವ ದಿವಸದ ವರೆಗೂ ಕುಷ್ಠರೋಗಿಯಾಗಿದ್ದನು. ಅವನು ಕುಷ್ಠರೋಗವುಳ್ಳವನಾದದರಿಂದ ಪ್ರತ್ಯೇಕವಾದ ಮನೆ ಯಲ್ಲಿ ವಾಸವಾಗಿದ್ದನು. ಯಾಕಂದರೆ ಅವನು ಕರ್ತನ ಆಲಯದಿಂದ ತೆಗೆದುಹಾಕಲ್ಪಟ್ಟವನಾಗಿದ್ದನು. ಅವನ ಮಗನಾದ ಯೋತಾಮನು ಅರಸನ ಮನೆಯ ಮೇಲೆ ಇದ್ದು ದೇಶದ ಜನರಿಗೆ ನ್ಯಾಯತೀರಿಸುತ್ತಾ ಇದ್ದನು.
26:22b.2CH.026.022 ಉಜ್ಜೀಯನ ಮಿಕ್ಕಾದ ಕ್ರಿಯೆಗಳನ್ನು, ಮೊದಲನೆ ಯವುಗಳನ್ನೂ ಕಡೆಯವುಗಳನ್ನೂ ಆಮೋಚನ ಮಗ ನಾದ ಯೆಶಾಯನು ಬರೆದನು. ಉಜ್ಜೀಯನು ತನ್ನ ಪಿತೃಗಳ ಸಂಗಡ ಮಲಗಿದನು;ಅವರು ಅರಸುಗಳಿಗೆ ಇದ್ದ ಸ್ಮಶಾನ ಭೂಮಿಯಲ್ಲಿ ಅವನ ಪಿತೃಗಳ ಸಂಗಡ ಅವನನ್ನು ಹೂಣಿಟ್ಟರು. ಯಾಕಂದರೆ--ಅವನು ಕುಷ್ಠ ರೋಗವುಳ್ಳವನು ಅಂದುಕೊಂಡರು. ಅವನ ಮಗ ನಾದ ಯೋತಾಮನು ಅವನಿಗೆ ಬದಲಾಗಿ ಆಳಿದನು.
26:23b.2CH.026.023 ಅವರು ಅರಸುಗಳಿಗೆ ಇದ್ದ ಸ್ಮಶಾನ ಭೂಮಿಯಲ್ಲಿ ಅವನ ಪಿತೃಗಳ ಸಂಗಡ ಅವನನ್ನು ಹೂಣಿಟ್ಟರು. ಯಾಕಂದರೆ--ಅವನು ಕುಷ್ಠ ರೋಗವುಳ್ಳವನು ಅಂದುಕೊಂಡರು. ಅವನ ಮಗ ನಾದ ಯೋತಾಮನು ಅವನಿಗೆ ಬದಲಾಗಿ ಆಳಿದನು.
27
27:1b.2CH.027.001 ಯೋತಾಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸ ಲೇಮಿನಲ್ಲಿ ಹದಿನಾರು ವರುಷಗಳು ಆಳಿದನು. ಇವನ ತಾಯಿಯಾದ ಯೆರೂಷಳು ಚಾದೋಕನ ಮಗಳು.
27:2b.2CH.027.002 ಇವನು ತನ್ನ ತಂದೆಯಾದ ಉಜ್ಜೀಯನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಸರಿಯಾದ ದ್ದನ್ನು ಮಾಡಿದನು. ಆದರೆ ಕರ್ತನ ಮನೆಯಲ್ಲಿ ಪ್ರವೇಶಿಸಲಿಲ್ಲ. ಜನರು ಇನ್ನೂ ಕೆಟ್ಟದ್ದನ್ನು ಮಾಡುತ್ತಾ ಇದ್ದರು.
27:3b.2CH.027.003 ಇವನು ಕರ್ತನ ಮಂದಿರದ ಎತ್ತರವಾದ ಬಾಗಲನ್ನು ಕಟ್ಟಿಸಿ ಓಫೇಲ್ ಎಂಬ ಗೋಡೆಯ ಮೇಲೆ ಬಹಳವಾಗಿ ಕಟ್ಟಿಸಿದನು.
27:4b.2CH.027.004 ಇದಲ್ಲದೆ ಯೆಹೂದ ಪರ್ವತಗಳಲ್ಲಿ ಪಟ್ಟಣಗಳನ್ನೂ ಅರಣ್ಯದಲ್ಲಿ ಕೋಟೆ ಗಳನ್ನೂ ಗಡೀಸ್ಥಾನಗಳನ್ನೂ ಕಟ್ಟಿಸಿದನು.
27:5b.2CH.027.005 ಇವನು ಅಮ್ಮೋನಿಯರ ಅರಸನ ಸಂಗಡ ಯುದ್ಧಮಾಡಿ ಅವ ನನ್ನು ಜಯಿಸಿದನು. ಆದ್ದರಿಂದ ಅಮ್ಮೋನನ ಮಕ್ಕಳು ಅದೇ ವರುಷದಲ್ಲಿ ನೂರು ಬೆಳ್ಳಿ ತಲಾಂತುಗಳನ್ನೂ ಹತ್ತುಸಾವಿರ ಅಳತೆಯ ಗೋಧಿಯನ್ನೂ ಹತ್ತು ಸಾವಿರ ಕೋರ್ ಜವೆ ಗೋಧಿಯನ್ನೂ ಅವನಿಗೆ ಕೊಟ್ಟರು. ಅಮ್ಮೋನನ ಮಕ್ಕಳು ಎರಡನೇ ವರುಷದಲ್ಲಿಯೂ ಮೂರನೇ ವರುಷದಲ್ಲಿಯೂ ಅದೇ ಪ್ರಕಾರ ಅವನಿಗೆ ಕೊಟ್ಟರು.
27:6b.2CH.027.006 ಹೀಗೆಯೇ ಯೋತಾಮನು ತನ್ನ ದೇವ ರಾದ ಕರ್ತನ ಮುಂದೆ ತನ್ನ ಮಾರ್ಗಗಳನ್ನು ಸರಿಪಡಿಸಿ ದ್ದರಿಂದ ಇವನು ಬಲಗೊಂಡನು.
27:7b.2CH.027.007 ಯೋತಾಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಯುದ್ಧಗಳೂ ಅವನ ಮಾರ್ಗಗಳೂ ಇಗೋ, ಅವು ಇಸ್ರಾಯೇಲ್ ಯೆಹೂದ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
27:8b.2CH.027.008 ಇವನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷ ದವನಾಗಿದ್ದು ಯೆರೂಸಲೇಮಿನಲ್ಲಿ ಹದಿನಾರು ವರುಷ ಆಳಿದನು.ಯೋತಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು. ಅವನ ಮಗನಾದ ಆಹಾ ಜನು ಅವನಿಗೆ ಬದಲಾಗಿ ಆಳಿದನು.
27:9b.2CH.027.009 ಯೋತಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು. ಅವನ ಮಗನಾದ ಆಹಾ ಜನು ಅವನಿಗೆ ಬದಲಾಗಿ ಆಳಿದನು.
28
28:1b.2CH.028.001 ಆಹಾಜನು ಆಳಲು ಆರಂಭಿಸಿದಾಗ ಇಪ್ಪತ್ತು ವರುಷದವನಾಗಿದ್ದು ಯೆರೂಸ ಲೇಮಿನಲ್ಲಿ ಹದಿನಾರು ವರುಷ ಆಳಿದನು. ಅವನು ತನ್ನ ಪಿತೃವಾದ ದಾವೀದನ ಹಾಗೆ ಕರ್ತನ ದೃಷ್ಟಿ ಯಲ್ಲಿ ಸರಿಯಾದದ್ದನ್ನು ಮಾಡಿದವನಲ್ಲ.
28:2b.2CH.028.002 ಅವನು ಇಸ್ರಾಯೇಲಿನ ಅರಸುಗಳ ಮಾರ್ಗಗಳಲ್ಲಿ ನಡೆದು ಬಾಳನಿಗೋಸ್ಕರ ಎರಕ ಹೊಯಿದ ವಿಗ್ರಹಗಳನ್ನು ಮಾಡಿಸಿದನು.
28:3b.2CH.028.003 ಇದಲ್ಲದೆ ಅವನು ಬೆನ್‌ಹಿನ್ನೋಮ ಮಗನ ತಗ್ಗಿನಲ್ಲಿ ಧೂಪವನ್ನರ್ಪಿಸಿ ಕರ್ತನು ಇಸ್ರಾ ಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯರ ಅಸಹ್ಯಗಳ ಪ್ರಕಾರ ಬೆಂಕಿಯಲ್ಲಿ ತನ್ನ ಮಕ್ಕಳನ್ನು ಸುಟ್ಟನು.
28:4b.2CH.028.004 ಹಾಗೆಯೇ ಅವನು ಬೆಟ್ಟಗಳಲ್ಲಿಯೂ ಮೇಡುಗಳ ಮೇಲೆಯೂ ಎಲ್ಲಾ ಹಸುರು ಗಿಡಗಳ ಕೆಳಗೂ ಬಲಿಗಳನ್ನೂ ಧೂಪವನ್ನೂ ಅರ್ಪಿಸಿದನು.
28:5b.2CH.028.005 ಆದದರಿಂದ ಅವನ ದೇವರಾದ ಕರ್ತನು ಅರಾಮಿನ ಅರಸನ ಕೈಯಲ್ಲಿ ಅವನನ್ನು ಒಪ್ಪಿಸಿದನು. ಅರಾಮ್ಯರು ಅವನನ್ನು ಹೊಡೆದು ಅವರಲ್ಲಿ ಅನೇಕರನ್ನು ಸೆರೆ ಯಾಗಿ ಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ ಇವನು ಇಸ್ರಾಯೇಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪ ಟ್ಟದ್ದರಿಂದ ಅವನು ಇವನನ್ನು ಹೊಡೆದು ದೊಡ್ಡ ಸಂಹಾರ ಮಾಡಿದನು.
28:6b.2CH.028.006 ಅವರು ತಮ್ಮ ಪಿತೃಗಳ ಕರ್ತನಾದ ದೇವರನ್ನು ಬಿಟ್ಟದ್ದರಿಂದ ರೆಮಲ್ಯನ ಮಗ ನಾದ ಪೆಕಹನು ಒಂದೇ ದಿವಸದೊಳಗೆ ಯೆಹೂ ದದವರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು; ಇವರೆಲ್ಲರು ಪರಾಕ್ರಮಶಾಲಿ ಗಳಾಗಿದ್ದರು.
28:7b.2CH.028.007 ಇದಲ್ಲದೆ ಎಫ್ರಯಾಮ್ಯನಾಗಿರುವ ಪರಾಕ್ರಮಶಾಲಿಯಾದ ಜಿಕ್ರಿಯು ಅರಸನ ಮಗ ನಾದ ಮಾಸೇಯನನ್ನೂ ಅರಮನೆಯ ನಾಯಕನಾದ ಅಜ್ರೀಕಾಮನನ್ನೂ ಅರಸನಿಗೆ ಎರಡನೆಯವನಾದ ಎಲ್ಕಾನನನ್ನೂ ಕೊಂದುಹಾಕಿದನು.
28:8b.2CH.028.008 ಇಸ್ರಾಯೇಲಿನ ಮಕ್ಕಳು ತಮ್ಮ ಸಹೋದರರಲ್ಲಿ ಎರಡು ಲಕ್ಷ ಮಂದಿ ಸ್ತ್ರೀಯರನ್ನೂ ಕುಮಾರರನ್ನೂ ಕುಮಾರ್ತೆಗಳನ್ನೂ ಸೆರೆ ಯಾಗಿ ತಕ್ಕೊಂಡುಹೋದರು. ಇದಲ್ಲದೆ ಅವರಿಂದ ಬಹು ಕೊಳ್ಳೆಯನ್ನು ತಕ್ಕೊಂಡು ಆ ಕೊಳ್ಳೆಯನ್ನು ಸಮಾರ್ಯಕ್ಕೆ ಒಯ್ದರು.
28:9b.2CH.028.009 ಅಲ್ಲಿ ಕರ್ತನ ಒಬ್ಬ ಪ್ರವಾದಿ ಇದ್ದನು; ಅವನ ಹೆಸರು ಓದೇದನು. ಅವನು ಸಮಾರ್ಯಕ್ಕೆ ಬಂದ ಸೈನ್ಯೆಕ್ಕೆದುರಾಗಿ ಹೊರಟುಹೋಗಿ ಅವರಿಗೆ--ಇಗೋ, ನಿಮ್ಮ ಪಿತೃಗಳ ಕರ್ತನಾದ ದೇವರು ಯೆಹೂದದ ಮೇಲೆ ಉರಿಗೊಂಡದ್ದರಿಂದ ಆತನು ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿರಲಾಗಿ, ನೀವು ಆಕಾಶಕ್ಕೆ ಮುಟ್ಟುವ ಉಗ್ರದಿಂದ ಅವರನ್ನು ಕೊಂದುಹಾಕಿದ್ದೀರಿ.
28:10b.2CH.028.010 ಈಗ ನಿಮಗೆ ದಾಸರೂ ದಾಸಿಗಳೂ ಆಗಿರುವ ಹಾಗೆ ಯೆಹೂದದವರನ್ನೂ ಯೆರೂಸಲೇಮಿನ ಮಕ್ಕಳನ್ನೂ ನಿಮ್ಮ ವಶಮಾಡಬೇಕೆಂದು ಅಂದುಕೊಳ್ಳುತ್ತೀರಿ. ಆದರೆ ನಿಮ್ಮಲ್ಲಿಯೇ ನಿಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಗಳು ಇಲ್ಲವೋ?
28:11b.2CH.028.011 ಆದದ ರಿಂದ ನೀವು ನನ್ನ ಮಾತು ಕೇಳಿ ನಿಮ್ಮ ಸಹೋದರ ರಲ್ಲಿ ನೀವು ಸೆರೆಯಾಗಿ ತಕ್ಕೊಂಡ ಸೆರೆಯವರನ್ನು ಬಿಟ್ಟುಬಿಡಿರಿ. ಯಾಕಂದರೆ ಉರಿಯುತ್ತಿರುವ ಕರ್ತನ ಕೋಪವು ನಿಮ್ಮ ಮೇಲೆ ಇರುವದು ಅಂದನು.
28:12b.2CH.028.012 ಆಗ ಎಫ್ರಾಯಾಮನ ಮಕ್ಕಳ ಶ್ರೇಷ್ಠರಲ್ಲಿ ಕೆಲವರಾಗಿರುವ ಯೆಹೋಹಾನಾನನ ಮಗನಾದ ಅಜರ್ಯನೂ ಮೆಷಿ ಲ್ಲೇಮೋತನ ಮಗನಾದ ಬೆರಕ್ಯನೂ ಶಲ್ಲೂಮನ ಮಗನಾದ ಹಿಜ್ಕಿಯನೂ ಹದ್ಲೈಯನ ಮಗನಾದ ಅಮಾಸನೂ ಯುದ್ಧದಿಂದ ಬಂದವರಿಗೆ ವಿರೋಧ ವಾಗಿ ಎದ್ದು
28:13b.2CH.028.013 ಅವರಿಗೆ--ನೀವು ಸೆರೆಯವರನ್ನು ಇಲ್ಲಿಗೆ ತರಬೇಡಿರಿ ಎಂದು ಹೇಳಿದರು; ಯಾಕಂದರೆ ನಾವು ಕರ್ತನಿಗೆ ವಿರೋಧವಾಗಿ ಅಪರಾಧ ಮಾಡಿ ದ್ದೇವೆ. ನೀವು ನಮ್ಮ ಪಾಪಗಳನ್ನೂ ಅಪರಾಧಗಳನ್ನೂ ಹೆಚ್ಚಿಸಬೇಕೆಂದಿದ್ದೀರಿ. ನಿಶ್ಚಯವಾಗಿ ನಮ್ಮ ಅಪರಾ ಧವು ದೊಡ್ಡದಾಗಿದೆ; ಇಸ್ರಾಯೇಲಿನ ಮೇಲೆ ಉಗ್ರ ಕೋಪವು ಉಂಟಾಯಿತು ಅಂದರು.
28:14b.2CH.028.014 ಆಗ ಸೈನ್ಯದ ವರು ಸೆರೆಯವರನ್ನೂ ಕೊಳ್ಳೆಯನ್ನೂ ಪ್ರಧಾನರ ಮುಂದೆಯೂ ಸಮಸ್ತ ಕೂಟದ ಮುಂದೆಯೂ ಬಿಟ್ಟು ಬಿಟ್ಟರು.
28:15b.2CH.028.015 ಆಗ ಹೆಸರಿನಿಂದ ಹೇಳಲ್ಪಟ್ಟ ಆ ಮನು ಷ್ಯರು ಎದ್ದು ಸೆರೆಯವರನ್ನು ತೆಗೆದುಕೊಂಡು ಅವರಲ್ಲಿ ಬೆತ್ತಲೆಯಾದವರಿಗೆ ಕೊಳ್ಳೆಯ ವಸ್ತ್ರಗಳನ್ನು ಉಡಿಸಿ ತೊಡಿಸಿ ಅವರಿಗೆ ಕೆರಗಳನ್ನು ಕೊಟ್ಟು ಉಣ್ಣುವದಕ್ಕೂ ಕುಡಿಯುವದಕ್ಕೂ ಕೊಟ್ಟು ಅವರ ತಲೆಗಳಿಗೆ ಎಣ್ಣೆ ಯನ್ನು ಹಚ್ಚಿ ಅವರಲ್ಲಿ ಇರುವ ಬಲಹೀನರನ್ನು ಕತ್ತೆಗಳ ಮೇಲೆ ಏರಿಸಿ ಯೆರಿಕೋವೆಂಬ ಖರ್ಜೂರದ ಪಟ್ಟಣಕ್ಕೆ ಅವರ ಸಹೋದರರ ಬಳಿಗೆ ಕರಕೊಂಡು ಹೋಗಿ ಸಮಾರ್ಯಕ್ಕೆ ಹಿಂತಿರುಗಿದರು.
28:16b.2CH.028.016 ಅದೇ ಕಾಲದಲ್ಲಿ ಅರಸನಾದ ಆಹಾಜನು ಅಶ್ಶೂ ರಿನ ಅರಸುಗಳ ಬಳಿಗೆ ಕಳುಹಿಸಿ ಸಹಾಯ ಬೇಡಿ ಕೊಂಡನು.
28:17b.2CH.028.017 ಯಾಕಂದರೆ ಎದೋಮ್ಯರು ತಿರಿಗಿ ಬಂದು ಯೆಹೂದದವರನ್ನು ಸಂಹರಿಸಿ ಕೆಲವರನ್ನು ಸೆರೆಯಾಗಿ ತಕ್ಕೊಂಡು ಹೋದರು.
28:18b.2CH.028.018 ಇದಲ್ಲದೆ ಫಿಲಿ ಷ್ಟಿಯರು ತಗ್ಗಿನ ದೇಶದ ಪಟ್ಟಣಗಳಲ್ಲಿಯೂ ಯೆಹೂ ದದ ದಕ್ಷಿಣ ಪಾರ್ಶ್ವದಲ್ಲಿಯೂ ಹೊಕ್ಕು ಬೇತ್ಷೆಮೆ ಷನ್ನೂ ಅಯ್ಯಾಲೋನನ್ನೂ ಗೆದೇರೋತನ್ನೂ ಸೋಕೋವನ್ನೂ ಅದರ ಗ್ರಾಮಗಳನ್ನೂ ತಿಮ್ನಾ ವನ್ನೂ ಅದರ ಗ್ರಾಮಗಳನ್ನೂ ಗಿಮ್ಜೋವನ್ನೂ ಅದರ ಗ್ರಾಮಗಳನ್ನೂ ತಕ್ಕೊಂಡು ಅಲ್ಲಿ ವಾಸವಾಗಿದ್ದರು.
28:19b.2CH.028.019 ಯಾಕಂದರೆ ಇಸ್ರಾಯೇಲಿನ ಅರಸನಾದ ಆಹಾ ಜನ ನಿಮಿತ್ತ ಕರ್ತನು ಯೆಹೂದವನ್ನು ತಗ್ಗಿಸಿದನು. ಅವನು ಯೆಹೂದವನ್ನು ಬೆತ್ತಲೆಯಾಗಿ ಮಾಡಿ ಕರ್ತ ನಿಗೆ ವಿರೋಧವಾಗಿ ಬಹಳ ಅಪರಾಧ ಮಾಡಿದನು.
28:20b.2CH.028.020 ಆಗ ಅಶ್ಶೂರಿನ ಅರಸನಾದ ತಿಗ್ಲತ್ಪಿಲೆಸರನು ಅವನ ಬಳಿಗೆ ಬಂದು ಅವನನ್ನು ಬಲಪಡಿಸದೆ ಬಾಧೆಪಡಿಸಿ ದನು.
28:21b.2CH.028.021 ಆಹಾಜನು ಕರ್ತನ ಮನೆಯಿಂದಲೂ ಅರಮನೆಯಿಂದಲೂ ಪ್ರಧಾನರಿಂದಲೂ ಒಂದು ಪಾಲನ್ನು ತೆಗೆದುಕೊಂಡು ಅಶ್ಶೂರಿನ ಅರಸನಿಗೆ ಕೊಟ್ಟನು; ಆದರೆ ಅವನು ಇವನಿಗೆ ಸಹಾಯ ಮಾಡದೆ ಹೋದನು.
28:22b.2CH.028.022 ಇದಲ್ಲದೆ ಅರಸನಾದ ಆಹಾಜನು ತನ್ನ ಇಕ್ಕಟ್ಟಿನ ಕಾಲದಲ್ಲಿ ಮತ್ತಷ್ಟು ಕರ್ತನಿಗೆ ವಿರೋಧ ವಾಗಿ ಅಪರಾಧ ಮಾಡಿದನು.
28:23b.2CH.028.023 ಏನಂದರೆ, ಅವನು ಅರಾಮಿನ ಅರಸುಗಳ ದೇವರುಗಳು ಅವರಿಗೆ ಸಹಾಯ ಕೊಟ್ಟದ್ದರಿಂದ--ಅವು ನನಗೆ ಸಹಾಯ ಕೊಡುವ ಹಾಗೆ ನಾನು ಅವುಗಳಿಗೆ ಬಲಿಯನ್ನು ಅರ್ಪಿಸುತ್ತೇನೆ ಎಂದು ಅಂದುಕೊಂಡು ತನ್ನನ್ನು ಹೊಡೆದ ದಮಸ್ಕ ದವರ ದೇವರುಗಳಿಗೆ ಬಲಿಗಳನ್ನು ಅರ್ಪಿಸಿದನು. ಆದರೆ ಅವು ಅವನನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಬೀಳುವಂತೆ ಮಾಡಿದವು.
28:24b.2CH.028.024 ಇದಲ್ಲದೆ ಆಹಾಜನು ದೇವರ ಮನೆಯ ಸಾಮಾನುಗಳನ್ನು ಕೂಡಿಸಿ ದೇವರ ಆಲಯದ ಸಾಮಾನುಗಳನ್ನು ತುಂಡುಗಳಾಗಿ ಕತ್ತರಿಸಿ ಕರ್ತನ ಮನೆಯ ಬಾಗಿಲುಗಳನ್ನು ಮುಚ್ಚಿಬಿಟ್ಟು ಯೆರೂ ಸಲೇಮಿನ ಸಮಸ್ತ ಮೂಲೆಗಳಲ್ಲಿ ಬಲಿಪೀಠಗಳನ್ನು ಕಟ್ಟಿಸಿದನು.
28:25b.2CH.028.025 ಯೆಹೂದದ ಸಮಸ್ತ ಪಟ್ಟಣಗಳಲ್ಲಿ ಅನ್ಯ ದೇವರುಗಳಿಗೆ ಧೂಪಸುಡುವದಕ್ಕಾಗಿ ಎತ್ತರ ಸ್ಥಳಗಳನ್ನು ಕಟ್ಟಿಸಿ ತನ್ನ ಪಿತೃಗಳ ದೇವರಾದ ಕರ್ತನಿಗೆ ಕೋಪವನ್ನೆಬ್ಬಿಸಿದನು.
28:26b.2CH.028.026 ಅವನ ಇತರ ಕ್ರಿಯೆಗಳೂ ಅವನ ಸಕಲ ಮಾರ್ಗಗಳೂ--ಮೊದಲನೆಯವುಗಳೂ ಕಡೆಯವು ಗಳೂ ಇಗೋ, ಯೆಹೂದದ ಇಸ್ರಾಯೇಲ್ಯರ ಅರಸು ಗಳ ಪುಸ್ತಕದಲ್ಲಿ ಬರೆಯಲ್ಪಟ್ಟವೆ.ಆಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ಅವನನ್ನು ಯೆರೂಸಲೇಮ್ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಇಸ್ರಾಯೇಲಿನ ಅರಸುಗಳ ಸಮಾಧಿಯ ಸ್ಥಳದಲ್ಲಿ ಅವನನ್ನು ತರಲಿಲ್ಲ. ಅವನ ಮಗನಾದ ಹಿಜ್ಕೀಯನು ಅವನಿಗೆ ಬದಲಾಗಿ ಆಳಿದನು.
28:27b.2CH.028.027 ಆಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ಅವನನ್ನು ಯೆರೂಸಲೇಮ್ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಇಸ್ರಾಯೇಲಿನ ಅರಸುಗಳ ಸಮಾಧಿಯ ಸ್ಥಳದಲ್ಲಿ ಅವನನ್ನು ತರಲಿಲ್ಲ. ಅವನ ಮಗನಾದ ಹಿಜ್ಕೀಯನು ಅವನಿಗೆ ಬದಲಾಗಿ ಆಳಿದನು.
29
29:1b.2CH.029.001 ಹಿಜ್ಕೀಯನು ಆಳಲಾರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸ ಲೇಮಿನಲ್ಲಿ ಇಪ್ಪತ್ತೊಂಭತ್ತು ವರುಷ ಆಳಿದನು. ಅವನ ತಾಯಿಯ ಹೆಸರು ಅಬೀಯಳು; ಇವಳು ಜೆಕರೀಯನ ಮಗಳಾಗಿದ್ದಳು.
29:2b.2CH.029.002 ಅವನು ತನ್ನ ಪಿತೃವಾದ ದಾವೀದನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದನು.
29:3b.2CH.029.003 ಅವನು ತನ್ನ ಆಳ್ವಿಕೆಯ ಮೊದಲನೇ ವರುಷದ ಮೊದಲನೇ ತಿಂಗಳಲ್ಲಿ ಕರ್ತನ ಮನೆಯ ಬಾಗಲು ಗಳನ್ನು ತೆರೆದು ಅವುಗಳನ್ನು ಭದ್ರಮಾಡಿಸಿದನು.
29:4b.2CH.029.004 ಇದಲ್ಲದೆ ಅವನು ಯಾಜಕರನ್ನೂ ಲೇವಿಯರನ್ನೂ ಕರೆಕಳುಹಿಸಿ ಅವರನ್ನು ಮೂಡಣ ಬೀದಿಯಲ್ಲಿ ಕೂಡಿಸಿ ಕೊಂಡು ಅವರಿಗೆ ಹೇಳಿದ್ದೇನಂದರೆ--
29:5b.2CH.029.005 ಲೇವಿಯರೇ, ನನ್ನ ಮಾತನ್ನು ಕೇಳಿರಿ; ನೀವು ನಿಮ್ಮನ್ನು ಪರಿಶುದ್ಧ ಮಾಡಿಕೊಂಡು ನಿಮ್ಮ ಪಿತೃಗಳ ಕರ್ತನಾದ ದೇವರ ಮನೆಯನ್ನು ಪರಿಶುದ್ಧಮಾಡಿ ಅದರ ಮೈಲಿಗೆಯನ್ನು ಪರಿಶುದ್ಧ ಸ್ಥಾನದಿಂದ ತೆಗೆದುಹಾಕಿರಿ.
29:6b.2CH.029.006 ನಮ್ಮ ಪಿತೃಗಳು ಅಪರಾಧಮಾಡಿ ನಮ್ಮ ದೇವರಾದ ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ನಡಿಸಿ ಆತನನ್ನು ಬಿಟ್ಟು ಕರ್ತನ ನಿವಾಸ ಸ್ಥಾನದ ಕಡೆಯಿಂದ ತಮ್ಮ ಮುಖಗಳನ್ನು ತಿರುಗಿಸಿ ತಮ್ಮ ಬೆನ್ನುಗಳನ್ನು ತೋರಿಸಿದ್ದಾರೆ.
29:7b.2CH.029.007 ಇದಲ್ಲದೆ ಅವರು ದ್ವಾರಾಂಗಳದ ಬಾಗಲುಗಳನ್ನು ಮುಚ್ಚಿ ದೀಪಗಳನ್ನು ಆರಿಸಿ ಇಸ್ರಾಯೇಲಿನ ದೇವರಿಗೆ ಪರಿಶುದ್ಧ ಸ್ಥಾನದಲ್ಲಿ ಧೂಪವನ್ನು ಸುಡದೆ, ದಹನಬಲಿಗಳನ್ನು ಅರ್ಪಿ ಸದೆ ಹೋದರು.
29:8b.2CH.029.008 ಆದದರಿಂದ ಯೆಹೂದದ ಮೇಲೆ ಯೂ ಮತ್ತು ಯೆರೂಸಲೇಮಿನವರ ಮೇಲೆಯೂ ಕರ್ತನ ರೌದ್ರವಾಯಿತು; ನೀವು ನಿಮ್ಮ ಕಣ್ಣುಗಳಿಂದ ನೋಡುವ ಹಾಗೆ ಆತನು ಅವರನ್ನು ಕಳವಳಕ್ಕೂ ವಿಸ್ಮಯಕ್ಕೂ ಅಪಹಾಸ್ಯಕ್ಕೂ ಒಪ್ಪಿಸಿಕೊಟ್ಟನು.
29:9b.2CH.029.009 ಅದ ಕ್ಕೋಸ್ಕರ ಇಗೋ, ನಮ್ಮ ಪಿತೃಗಳು ಕತ್ತಿಯಿಂದ ಬಿದ್ದಿ ದ್ದಾರೆ; ನಮ್ಮ ಕುಮಾರರೂ ಕುಮಾರ್ತೆಯರೂ ಹೆಂಡ ತಿಯರೂ ಸೆರೆಯಲ್ಲಿದ್ದಾರೆ.
29:10b.2CH.029.010 ಈಗ ಇಸ್ರಾಯೇಲಿನ ದೇವರಾದ ಕರ್ತನ ಉಗ್ರಕೋಪವು ನಮ್ಮನ್ನು ಬಿಟ್ಟು ಹೋಗುವ ಹಾಗೆ ನಾನು ಆತನ ಸಂಗಡ ಒಡಂಬಡಿ ಕೆಯನ್ನು ಮಾಡಲು ಮನಸ್ಸುಳ್ಳವನಾಗಿದ್ದೇನೆ.
29:11b.2CH.029.011 ನನ್ನ ಮಕ್ಕಳೇ, ಉದಾಸೀನರಾಗಿರಬೇಡಿರಿ; ಯಾಕಂದರೆ ತನ್ನ ಸಮ್ಮುಖದಲ್ಲಿ ನಿಲ್ಲುವದಕ್ಕೂ ತನ್ನನ್ನು ಸೇವಿಸುವದಕ್ಕೂ ಸೇವಕರಾಗಿರುವದಕ್ಕೂ ಧೂಪಸುಡುವದಕ್ಕೂ ಕರ್ತನು ನಿಮ್ಮನ್ನು ಆದುಕೊಂಡಿದ್ದಾನೆ ಅಂದನು.
29:12b.2CH.029.012 ಆಗ ಲೇವಿಯರಾದ ಕೆಹಾತ್ಯರ ಮಕ್ಕಳಲ್ಲಿ ಅಮಾಸೈ ಯನ ಮಗನಾದ ಮಹತನೂ ಅಜರ್ಯನ ಮಗನಾದ ಯೋವೇಲೂ ಮೆರಾರೀಯ ಮಕ್ಕಳಲ್ಲಿ ಅಬ್ದೀಯ ಮಗ ನಾದ ಕೀಷನೂ ಯಹಲ್ಲೇಲನ ಮಗನಾದ ಅಜ ರ್ಯನೂ ಗೆರ್ಷೋನ್ಯರಲ್ಲಿ ಜಿಮ್ಮನ ಮಗನಾದ ಯೋವಾಹನೂ ಯೋವಾಹನ ಮಗನಾದ ಏದೆನೂ
29:13b.2CH.029.013 ಎಲೀಚಾಫಾನನ ಮಕ್ಕಳಲ್ಲಿ ಶಿಮ್ರಿಯೂ ಯೆಗೀ ಯೇಲನೂ ಆಸಾಫನ ಮಕ್ಕಳಲ್ಲಿ
29:14b.2CH.029.014 ಜೆಕರ್ಯನೂ ಮತ್ತನ್ಯನೂ ಹೆಮಾನನ ಮಕ್ಕಳಲ್ಲಿ ಯೆಹೀಯೇಲನೂ ಶಿಮ್ಮನೂ ಯೆದುತೂನನ ಮಕ್ಕಳಲ್ಲಿ ಶೆಮಾಯನೂ ಉಜ್ಜೀಯೇಲನೂ ಎದ್ದರು.
29:15b.2CH.029.015 ಇವರು ತಮ್ಮ ಸಹೋ ದರರನ್ನು ಕೂಡಿಸಿ ತಮ್ಮನ್ನು ಪರಿಶುದ್ಧ ಮಾಡಿಕೊಂಡು ಕರ್ತನ ವಾಕ್ಯದಿಂದ ಅರಸನ ಆಜ್ಞೆಯ ಪ್ರಕಾರ ಕರ್ತನ ಆಲಯವನ್ನು ಶುಚಿಮಾಡಲು ಬಂದರು.
29:16b.2CH.029.016 ಯಾಜ ಕರು ಕರ್ತನ ಆಲಯವನ್ನು ಶುಚಿಮಾಡಲು ಅದರ ಒಳಭಾಗದಲ್ಲಿ ಪ್ರವೇಶಿಸಿ ಕರ್ತನ ಮಂದಿರದಲ್ಲಿ ಕಂಡ ಮೈಲಿಗೆಯನ್ನು ಕರ್ತನ ಮನೆಯ ಅಂಗಳದೊಳಗೆ ತಂದರು; ಆಗ ಲೇವಿಯರು ಅದನ್ನು ತೆಗೆದುಕೊಂಡು ಕಿದ್ರೋನು ಹಳ್ಳದಲ್ಲಿ ಹಾಕಲು ಹೊರಗೆ ಒಯ್ದರು.
29:17b.2CH.029.017 ಅವರು ಮೊದಲನೇ ತಿಂಗಳಿನ ಮೊದಲನೇ ದಿವಸ ದಲ್ಲಿ ಪರಿಶುದ್ಧ ಮಾಡಲು ಆರಂಭಿಸಿ ಆ ತಿಂಗಳ ಎಂಟನೇ ದಿವಸದಲ್ಲಿ ಕರ್ತನ ದ್ವಾರಾಂಗಳದ ವರೆಗೂ ಬಂದರು. ಹೀಗೆಯೇ ಎಂಟು ದಿವಸಗಳಲ್ಲಿ ಕರ್ತನ ಮನೆಯನ್ನು ಪರಿಶುದ್ಧಮಾಡಿ ಅದನ್ನು ಮೊದಲನೇ ತಿಂಗಳಿನ ಹದಿನಾರನೇ ದಿವಸದಲ್ಲಿ ತೀರಿಸಿದರು.
29:18b.2CH.029.018 ಆಗ ಅವರು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ--ಕರ್ತನ ಸಮಸ್ತ ಆಲಯವನ್ನೂ ದಹನಬಲಿಯ ಯಜ್ಞವೇದಿಯನ್ನೂ ಅದರ ಎಲ್ಲಾ ಪಾತ್ರೆಗಳನ್ನೂ ಸಮ್ಮುಖದ ರೊಟ್ಟಿಯ ಮೇಜನ್ನೂ ಅದರ ಎಲ್ಲಾ ಪಾತ್ರೆಗಳನ್ನೂ ಶುಚಿಮಾಡಿದೆವು.
29:19b.2CH.029.019 ಇದಲ್ಲದೆ ಅರಸನಾದ ಆಹಾಜನು ಆಳಿದಾಗ ತನ್ನ ಅಕೃತ್ಯದಿಂದ ಬಿಸಾಡಿದ ಎಲ್ಲಾ ಸಾಮಾನುಗಳನ್ನು ಸಿದ್ಧ ಮಾಡಿ ಪರಿಶುದ್ಧಮಾಡಿದೆವು; ಇಗೋ, ಅವು ಕರ್ತನ ಬಲಿಪೀಠದ ಮುಂದಿರುತ್ತವೆ ಎಂದು ಹೇಳಿದರು.
29:20b.2CH.029.020 ಆಗ ಅರಸನಾದ ಹಿಜ್ಕೀಯನು ಉದಯದಲ್ಲಿ ಎದ್ದು ಪಟ್ಟಣದ ಪ್ರಧಾನರನ್ನು ಕೂಡಿಸಿ ಕರ್ತನ ಆಲಯಕ್ಕೆ ಹೋದನು.
29:21b.2CH.029.021 ಅವರು ರಾಜ್ಯಕ್ಕೋಸ್ಕರವೂ ಪರಿಶುದ್ಧ ಸ್ಥಾನಕ್ಕೋಸ್ಕರವೂ ಯೆಹೂದಕ್ಕೋಸ್ಕರವೂ ಪಾಪದ ಬಲಿಯಾಗಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಏಳು ಕುರಿಮರಿಗಳನ್ನೂ ಏಳು ಮೇಕೆ ಗಳನ್ನೂ ತಂದರು. ಆಗ ಕರ್ತನ ಬಲಿಪೀಠದ ಮೇಲೆ ಅವುಗಳನ್ನು ಅರ್ಪಿಸಲು ಆರೋನನ ಮಕ್ಕಳಾದ ಯಾಜಕರಿಗೆ ಹೇಳಿದನು.
29:22b.2CH.029.022 ಹೀಗೆ ಅವರು ಹೋರಿ ಗಳನ್ನು ವಧಿಸಿದಾಗ ಯಾಜಕರು ಅವುಗಳ ರಕ್ತವನ್ನು ತೆಗೆದುಕೊಂಡು ಬಲಿಪೀಠದ ಮೇಲೆ ಚಿಮಿಕಿಸಿದರು; ಹಾಗೆಯೇ ಅವರು ಟಗರುಗಳನ್ನು ವಧಿಸಿ ರಕ್ತವನ್ನು ಬಲಿಪೀಠದ ಮೇಲೆ ಚಿಮಿಕಿಸಿದರು; ಅವರು ಕುರಿಮರಿ ಗಳನ್ನೂ ವಧಿಸಿ ರಕ್ತವನ್ನು ಬಲಿಪೀಠದ ಮೇಲೆ ಚಿಮಿಕಿಸಿದರು.
29:23b.2CH.029.023 ಅರಸನ ಮುಂದೆಯೂ ಸಭೆಯ ಮುಂದೆಯೂ ಪಾಪದ ಬಲಿಯಾದ ಮೇಕೆ ಹೋತ ಗಳನ್ನು ಹತ್ತಿರ ತಕ್ಕೊಂಡು ಬಂದು ತಮ್ಮ ಕೈಗಳನ್ನು ಅವುಗಳ ಮೇಲೆ ಇಟ್ಟರು.
29:24b.2CH.029.024 ಆಗ ಸಮಸ್ತ ಇಸ್ರಾಯೇ ಲಿಗೋಸ್ಕರ ಪ್ರಾಯಶ್ಚಿತ್ತವಾಗಿ ಯಾಜಕರು ಅವುಗಳನ್ನು ವಧಿಸಿ ಬಲಿಪೀಠದ ಮೇಲೆ ಅವುಗಳ ರಕ್ತದಿಂದ ಪಾಪ ನಿವಾರಣೆ ಮಾಡಿದರು. ದಹನಬಲಿಯೂ ಪಾಪದ ಬಲಿಯೂ ಸಮಸ್ತ ಇಸ್ರಾಯೇಲಿಗೋಸ್ಕರ ಆಗ ಬೇಕೆಂದು ಅರಸನು ಆಜ್ಞಾಪಿಸಿದನು,
29:25b.2CH.029.025 ಇದಲ್ಲದೆ ದಾವೀದನೂ ಅರಸನ ದರ್ಶಿಯಾದ ಗಾದನೂ ಪ್ರವಾ ದಿಯಾದ ನಾತಾನನೂ ಇವರ ಆಜ್ಞೆಯ ಪ್ರಕಾರ ತಾಳ ವೀಣೆ ಕಿನ್ನರಿಗಳನ್ನು ಹಿಡಿದವರಾಗಿ ಕರ್ತನ ಆಲಯದಲ್ಲಿ ಲೇವಿಯರನ್ನು ನಿಲ್ಲಿಸಿದನು. ಕರ್ತನ ಆಜ್ಞೆಯು ಅವನ ಪ್ರವಾದಿಗಳ ಮುಖಾಂತರ ಹಾಗೆ ಇತ್ತು.
29:26b.2CH.029.026 ಲೇವಿಯರು ದಾವೀದನ ವಾದ್ಯಗಳನ್ನೂ ಯಾಜಕರು ತುತೂರಿಗಳನ್ನೂ ಹಿಡಿದು ನಿಂತಿರುವಾಗ
29:27b.2CH.029.027 ಹಿಜ್ಕೀಯನು ಬಲಿಪೀಠದ ಮೇಲೆ ದಹನಬಲಿ ಯನ್ನು ಅರ್ಪಿಸಲು ಹೇಳಿದನು. ದಹನಬಲಿಯನ್ನು ಅರ್ಪಿಸಲು ಆರಂಭಿಸಿದಾಗ ತುತೂರಿಗಳಿಂದಲೂ ಇಸ್ರಾಯೇಲಿನ ಅರಸನಾದ ದಾವೀದನ ವಾದ್ಯಗ ಳಿಂದಲೂ ಕರ್ತನ ಹಾಡು ಆರಂಭವಾಯಿತು.
29:28b.2CH.029.028 ಆಗ ಸಭೆಯವರೆಲ್ಲರೂ ಆರಾಧಿಸಿದರು. ದಹನಬಲಿ ಅರ್ಪಿಸಿ ತೀರಿಸುವ ಪರ್ಯಂತರ ಹಾಡುಗಾರರು ಹಾಡಿದರು, ತುತೂರಿ ಊದುವವರು ಊದಿದರು.
29:29b.2CH.029.029 ಅವರು ಅರ್ಪಿಸುವದು ತೀರಿದಾಗ ಅರಸನೂ ಅವನ ಸಂಗಡ ಇದ್ದವರೆಲ್ಲರೂ ಬೊಗ್ಗಿ ಆರಾಧಿಸಿ ದರು.
29:30b.2CH.029.030 ಇದಲ್ಲದೆ ಅರಸನಾದ ಹಿಜ್ಕೀಯನೂ ಪ್ರಧಾ ನರೂ ದಾವೀದನ ಮತ್ತು ಪ್ರವಾದಿಯಾದ ಆಸಾಫನ ಮಾತುಗಳಿಂದ ಕರ್ತನನ್ನು ಸ್ತುತಿಸಬೇಕೆಂದು ಲೇವಿ ಯರಿಗೆ ಹೇಳಿದರು. ಆಗ ಅವರು ಸಂತೋಷವಾಗಿ ಸ್ತುತಿಸಿ ಬೊಗ್ಗಿಕೊಂಡು ಆರಾಧಿಸಿದರು.
29:31b.2CH.029.031 ಹಿಜ್ಕೀಯನು ಅವರಿಗೆ ಉತ್ತರಕೊಟ್ಟು--ಈಗ ನೀವು ನಿಮ್ಮನ್ನು ಕರ್ತನಿಗೆ ಪ್ರತಿಷ್ಠೆಮಾಡಿದ್ದ ರಿಂದ ಸವಿಾಪಕ್ಕೆ ಬಂದು ಬಲಿಗಳನ್ನೂ ಸ್ತೋತ್ರ ಅರ್ಪಣೆಗಳನ್ನೂ ಕರ್ತನ ಆಲಯಕ್ಕೆ ತಕ್ಕೊಂಡು ಬನ್ನಿರಿ ಅಂದನು. ಆಗ ಕೂಟದವರು ಬಲಿಗಳನ್ನೂ ಸ್ತೋತ್ರದ ಅರ್ಪಣೆಗಳನ್ನೂ ಉಚಿತಾರ್ಥ ವಾಗಿ ಕೊಡಲು ಮನಸ್ಸುಳ್ಳವರು ದಹನಬಲಿಗಳನ್ನೂ ತಂದರು.
29:32b.2CH.029.032 ಸಭೆಯು ತಂದ ದಹನ ಬಲಿಗಳ ಲೆಕ್ಕ ವೇನಂದರೆ: ಎಪ್ಪತ್ತು ಹೋರಿಗಳು, ನೂರು ಟಗರು ಗಳು, ಇನ್ನೂರು ಕುರಿಮರಿಗಳು. ಇವೆಲ್ಲಾ ಕರ್ತನಿಗೆ ಅರ್ಪಿಸಿದ ದಹನಬಲಿಗಳಾಗಿದ್ದವು.
29:33b.2CH.029.033 ಪ್ರತಿಷ್ಠೆ ಮಾಡ ಲ್ಪಟ್ಟವುಗಳು ಆರುನೂರು ಹೋರಿಗಳೂ ಮೂರು ಸಾವಿರ ಕುರಿಗಳೂ ಇದ್ದವು.
29:34b.2CH.029.034 ಯಾಜಕರು ಸ್ವಲ್ಪ ಜನರಾಗಿದ್ದು ದಹನಬಲಿಗಳನ್ನೆಲ್ಲಾ ಸುಲಿಯಲಾರದೆ ಇದ್ದದ್ದರಿಂದ ಕೆಲಸವು ತೀರುವ ವರೆಗೂ ಯಾಜಕರು ತಮ್ಮನ್ನು ಪರಿಶುದ್ಧಮಾಡಿಕೊಳ್ಳುವ ವರೆಗೂ ಲೇವಿ ಯರಾದ ಅವರ ಸಹೋದರರು ಅವರಿಗೆ ಸಹಾಯ ಮಾಡುತ್ತಿದ್ದರು. ಯಾಕಂದರೆ ತಮ್ಮನ್ನು ಪರಿಶುದ್ಧಮಾಡಿ ಕೊಳ್ಳಲು ಯಾಜಕರಿಗಿಂತ ಲೇವಿಯರು ಯಥಾರ್ಥ ಹೃದಯವುಳ್ಳವರಾಗಿದ್ದರು.
29:35b.2CH.029.035 ಇದಲ್ಲದೆ ದಹನಬಲಿ ಗಳೂ ಸಮಾಧಾನದ ಬಲಿಗಳ ಕೊಬ್ಬೂ ದಹನ ಬಲಿಗೆ ಬೇಕಾದ ಪಾನದ ಅರ್ಪಣೆಗಳೂ ಬಹಳ ವಾಗಿದ್ದವು. ಹೀಗೆಯೇ ಕರ್ತನ ಆಲಯದ ಸೇವೆಯು ಸಿದ್ಧವಾಯಿತು.ಆಗ ದೇವರು ಜನರನ್ನು ಸಿದ್ಧಮಾಡಿದ್ದರಿಂದ ಹಿಜ್ಕೀಯನೂ ಜನರೆಲ್ಲರೂ ಸಂತೋಷಪಟ್ಟರು; ಯಾಕಂದರೆ ಈ ಕಾರ್ಯವು ಅಕಸ್ಮಾತ್ತಾಗಿ ಆಯಿತು.
29:36b.2CH.029.036 ಆಗ ದೇವರು ಜನರನ್ನು ಸಿದ್ಧಮಾಡಿದ್ದರಿಂದ ಹಿಜ್ಕೀಯನೂ ಜನರೆಲ್ಲರೂ ಸಂತೋಷಪಟ್ಟರು; ಯಾಕಂದರೆ ಈ ಕಾರ್ಯವು ಅಕಸ್ಮಾತ್ತಾಗಿ ಆಯಿತು.
30
30:1b.2CH.030.001 ಆಗ ಅವರು ಇಸ್ರಾಯೇಲಿನ ದೇವರಾದ ಕರ್ತನ ಪಸ್ಕವನ್ನು ಆಚರಿಸಲು ಯೆರೂ ಸಲೇಮಿನಲ್ಲಿ ಕರ್ತನ ಆಲಯಕ್ಕೆ ಬರುವ ಹಾಗೆ ಹಿಜ್ಕೀಯನು ಸಮಸ್ತ ಇಸ್ರಾಯೇಲಿಗೂ ಯೆಹೂದಕ್ಕೂ ಹೇಳಿ ಕಳುಹಿಸಿ, ಎಫ್ರಾಯಾಮ್ಯರಿಗೂ ಮನಸ್ಸೆಯ ವರಿಗೂ ಪತ್ರಗಳನ್ನು ಬರೆದನು.
30:2b.2CH.030.002 ಯೆರೂಸಲೇಮಿ ನಲ್ಲಿರುವ ಅರಸನೂ ಅವನ ಪ್ರಧಾನರೂ ಸಮಸ್ತ ಸಭೆಯೂ ಎರಡನೇ ತಿಂಗಳಲ್ಲಿ ಪಸ್ಕವನ್ನು ಆಚರಿ ಸಲು ಯೋಚಿಸಿಕೊಂಡರು.
30:3b.2CH.030.003 ಯಾಕಂದರೆ ಯಾಜಕರು ತಮ್ಮನ್ನು ತಕ್ಕಹಾಗೆ ಪರಿಶುದ್ಧಮಾಡಿಕೊಳ್ಳದೆ ಇದ್ದದ್ದ ರಿಂದಲೂ ಜನರು ಯೆರೂಸಲೇಮಿಗೆ ಕೂಡಿ ಬಾರದೆ ಇದ್ದದ್ದರಿಂದಲೂ ಆ ಕಾಲದಲ್ಲಿ ಆಚರಿಸಲಾರದೆ ಇದ್ದರು.
30:4b.2CH.030.004 ಈ ಕಾರ್ಯವು ಅರಸನಿಗೂ ಸಮಸ್ತ ಸಭೆ ಯವರಿಗೂ ಒಪ್ಪಿಗೆಯಾಯಿತು.
30:5b.2CH.030.005 ಆದದರಿಂದ ಅವರು ಯೆರೂಸಲೇಮಿನಲ್ಲಿ ಇಸ್ರಾಯೇಲಿನ ದೇವರಾದ ಕರ್ತನಿಗೆ ಪಸ್ಕವನ್ನು ಆಚರಿಸಲು ಬರಬೇಕೆಂದು ಬೇರ್ಷೆಬವು ಮೊದಲುಗೊಂಡು ದಾನಿನ ವರೆಗೂ ಸಮಸ್ತ ಇಸ್ರಾಯೇಲಿನಲ್ಲಿ ಕೂಗಿ ಸಾರಲು ನಿರ್ಣಯಿ ಸಿದರು. ಯಾಕಂದರೆ ಬರೆಯಲ್ಪಟ್ಟ ಹಾಗೆ ಅವರು ಅದನ್ನು ಬಹು ಕಾಲದಿಂದ ಆಚರಿಸಿದ್ದಿಲ್ಲ.
30:6b.2CH.030.006 ಅದೇ ಪ್ರಕಾರ ದೂತರು ಅರಸನ ಕೈಯಿಂದಲೂ ಅವನ ಪ್ರಧಾನರ ಕೈಯಿಂದಲೂ ಪತ್ರಗಳನ್ನು ತಕ್ಕೊಂಡು ಅರಸನ ಅಪ್ಪಣೆಯ ಪ್ರಕಾರ ಸಮಸ್ತ ಇಸ್ರಾಯೇಲ್ ಯೆಹೂದ ದೇಶಗಳ ಮೇಲೆ ಹೋಗಿ--ಇಸ್ರಾಯೇಲ್ ಮಕ್ಕಳೇ, ಅಬ್ರಹಾಮ್ ಇಸಾಕ್ ಇಸ್ರಾಯೇಲ್ ಕರ್ತನಾದ ದೇವರ ಕಡೆಗೆ ತಿರುಗಿರಿ. ಆಗ ಆತನೂ ಅಶ್ಶೂರಿನ ಅರಸುಗಳ ಕೈಗೆ ತಪ್ಪಿಸಿಕೊಂಡ ನಿಮ್ಮ ಉಳಿದವರ ಬಳಿಗೆ ತಿರುಗುವನು.
30:7b.2CH.030.007 ತಮ್ಮ ಪಿತೃಗಳ ದೇವರಾದ ಕರ್ತನಿಗೆ ಅಪರಾಧ ಮಾಡಿದಂಥ, ನೀವು ನೋಡುವ ಹಾಗೆ ನಾಶನಕ್ಕೆ ಒಪ್ಪಿಸಲ್ಪಟ್ಟಂಥ, ನಿಮ್ಮ ಪಿತೃಗಳ ಹಾಗೆಯೂ ನಿಮ್ಮ ಸಹೋದರರ ಹಾಗೆಯೂ ಇರಬೇಡಿರಿ.
30:8b.2CH.030.008 ನಿಮ್ಮ ಪಿತೃ ಗಳ ಹಾಗೆ ನಿಮ್ಮ ಕುತ್ತಿಗೆಯನ್ನು ಕಠಿಣಪಡಿಸಬೇಡಿರಿ. ಕರ್ತನಿಗೆ ಕೈಕೊಟ್ಟು ಆತನು ಯುಗಯುಗಕ್ಕೂ ಪರಿಶುದ್ಧ ಮಾಡಿದ ಆತನ ಪರಿಶುದ್ಧ ಸ್ಥಾನದಲ್ಲಿ ಪ್ರವೇಶಿಸಿದ ನಿಮ್ಮ ದೇವರಾದ ಕರ್ತನನ್ನು ಸೇವಿಸಿರಿ. ಆಗ ತನ್ನ ಉಗ್ರಕೋಪವನ್ನು ಬಿಟ್ಟು ನಿಮ್ಮ ಕಡೆಗೆ ತಿರುಗುವನು.
30:9b.2CH.030.009 ನೀವು ಕರ್ತನ ಕಡೆಗೆ ತಿರುಗಿದರೆ ನಿಮ್ಮ ಸಹೋದ ರರೂ ನಿಮ್ಮ ಮಕ್ಕಳೂ ತಿರಿಗಿ ಈ ದೇಶಕ್ಕೆ ಬರುವ ಹಾಗೆ ತಮ್ಮನ್ನು ಸೆರೆಯಾಗಿ ಒಯ್ದವರ ಸಮ್ಮುಖದಲ್ಲಿ ಕರುಣೆಯನ್ನು ಹೊಂದುವರು. ನಿಮ್ಮ ದೇವರಾದ ಕರ್ತನು ಕೃಪೆಯೂ ಕರುಣೆಯೂ ಉಳ್ಳವನಾಗಿದ್ದಾನೆ, ನೀವು ಆತನ ಕಡೆಗೆ ತಿರುಗಿದರೆ ಆತನು ನಿಮ್ಮ ಕಡೆ ಯಿಂದ ತನ್ನ ಮುಖ ತೊಲಗಿಸನು ಎಂದು ಹೇಳಿದರು.
30:10b.2CH.030.010 ಹೀಗೆಯೇ ದೂತರು ಎಫ್ರಾಯಾಮಿನ, ಮನ ಸ್ಸೆಯ ದೇಶದಲ್ಲಿ ಜೆಬುಲೂನ್ ಪರ್ಯಂತರ ಸಂಚರಿಸಿ ಪಟ್ಟಣದಿಂದ ಪಟ್ಟಣಕ್ಕೆ ಹಾದುಹೋದರು. ಆದರೆ ಜನರು ಇವರನ್ನು ನೋಡಿ ನಕ್ಕು ಗೇಲಿ ಮಾಡಿದರು.
30:11b.2CH.030.011 ಆದಾಗ್ಯೂ ಅಶೇರ, ಮನಸ್ಸೆ, ಜೆಬುಲೂನ್ ಇವರಲ್ಲಿ ಕೆಲವರು ತಮ್ಮನ್ನು ತಗ್ಗಿಸಿಕೊಂಡು ಯೆರೂಸಲೇಮಿಗೆ ಬಂದರು.
30:12b.2CH.030.012 ಇದಲ್ಲದೆ ಕರ್ತನ ವಾಕ್ಯದಿಂದುಂಟಾದ ಅರಸನ ಪ್ರಧಾನರ ಆಜ್ಞೆಯನ್ನು ಕೈಕೊಳ್ಳಲು ಅವರಿಗೆ ಒಂದೇ ಹೃದಯವನ್ನು ಕೊಡಲು ದೇವರ ಕೈ ಯೆಹೂ ದದವರಲ್ಲಿ ಇತ್ತು.
30:13b.2CH.030.013 ಆದದರಿಂದ ಎರಡನೇ ತಿಂಗಳಲ್ಲಿ ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸುವದಕ್ಕೆ ಯೆರೂಸಲೇಮಿನಲ್ಲಿ ಬಹಳ ಜನರು ಕೂಡಿ ಕೊಂಡು ಮಹಾದೊಡ್ಡ ಸಭೆಯಾಯಿತು.
30:14b.2CH.030.014 ಆಗ ಅವರು ಎದ್ದು ಯೆರೂಸಲೇಮಿನಲ್ಲಿದ್ದ ಬಲಿಪೀಠಗಳನ್ನು ತೆಗೆದುಹಾಕಿದರು ಮತ್ತು ಧೂಪಪೀಠಗಳನ್ನೆಲ್ಲಾ ತೆಗೆದು ಬಿಟ್ಟು ಕಿದ್ರೋನ್ ಹಳ್ಳದಲ್ಲಿ ಹಾಕಿದರು.
30:15b.2CH.030.015 ಎರಡನೇ ತಿಂಗಳ ಹದಿನಾಲ್ಕನೇ ದಿವಸದಲ್ಲಿ ಪಸ್ಕ ವನ್ನು ವಧಿಸಿದರು. ಯಾಜಕರೂ ಲೇವಿಯರೂ ಲಜ್ಜೆ ಯನ್ನು ಹೊಂದಿ ತಮ್ಮನ್ನು ಪರಿಶುದ್ಧ ಮಾಡಿಕೊಂಡು ಕರ್ತನ ಮನೆಯೊಳಗೆ ದಹನಬಲಿಗಳನ್ನು ತಂದರು.
30:16b.2CH.030.016 ಇದಲ್ಲದೆ ಅವರು ದೇವರ ಮನುಷ್ಯನಾದ ಮೋಶೆ ಯ ನ್ಯಾಯಪ್ರಮಾಣದ ಹಾಗೆ ತಮ್ಮ ಪದ್ಧತಿಯ ಪ್ರಕಾರ ತಮ್ಮ ತಮ್ಮ ಸ್ಥಳದಲ್ಲಿ ನಿಂತು ಯಾಜಕರು ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಚಿಮುಕಿಸಿದರು.
30:17b.2CH.030.017 ಯಾಕಂದರೆ ಸಭೆಯಲ್ಲಿ ಅನೇಕರು ಅಪರಿಶುದ್ಧರಾಗಿದ್ದರು, ಲೇವಿಯರು ಅಶುದ್ಧರಾದ ಎಲ್ಲರ ನಿಮಿತ್ತ ಅವರನ್ನು ಕರ್ತನಿಗೆ ಪರಿಶುದ್ಧ ಮಾಡುವ ಹಾಗೆ ಪಸ್ಕದ ಬಲಿಗಳನ್ನು ವಧಿಸುವದಕ್ಕೆ ಇದ್ದರು.
30:18b.2CH.030.018 ಯಾಕಂದರೆ ಜನರಲ್ಲಿ ಅನೇಕರು--ಎಫ್ರಾ ಯಾಮ್, ಮನಸ್ಸೆ, ಇಸ್ಸಾಕಾರ್, ಜೆಬುಲೂನ್ ಇವ ರಲ್ಲಿ ಅನೇಕರು ತಮ್ಮನ್ನು ಶುದ್ಧ ಮಾಡಿಕೊಳ್ಳದೆ, ಬರೆಯಲ್ಪಟ್ಟ ಪ್ರಕಾರವಲ್ಲದೆ ಪಸ್ಕವನ್ನು ಉಂಡರು.
30:19b.2CH.030.019 ಆದರೆ ಹಿಜ್ಕೀಯನು ಅವರಿಗೋಸ್ಕರ ಪ್ರಾರ್ಥಿಸಿಯಾವನಾದರೂ ಪರಿಶುದ್ಧ ಸ್ಥಾನದ ಶುದ್ಧಿಯ ಪ್ರಕಾರ ಶುಚಿಯಾಗದೆ ಇದ್ದರೂ ತನ್ನ ಪಿತೃಗಳ ಕರ್ತನಾದ ದೇವರಾಗಿರುವ ದೇವರನ್ನು ಹುಡುಕಲು ತನ್ನ ಹೃದಯ ವನ್ನು ಸಿದ್ಧಮಾಡುವವನ ಪಾಪವನ್ನು ದಯವುಳ್ಳ ಕರ್ತನು ಮುಚ್ಚಲಿ ಎಂದು ಹೇಳಿದನು.
30:20b.2CH.030.020 ಕರ್ತನು ಹಿಜ್ಕೀಯನ ಮಾತು ಕೇಳಿ ಜನರನ್ನು ಗುಣಮಾಡಿದನು.
30:21b.2CH.030.021 ಯೆರೂಸಲೇಮಿನಲ್ಲಿದ್ದ ಇಸ್ರಾಯೇಲಿನ ಮಕ್ಕಳು ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಏಳು ದಿವಸ ಸಂತೋಷದಿಂದ ಆಚರಿಸಿದರು. ಇದಲ್ಲದೆ ಲೇವಿ ಯರೂ ಯಾಜಕರೂ ಮಹಾಶಬ್ದದ ವಾದ್ಯಗಳಿಂದ ಕರ್ತನಿಗೆ ಹಾಡಿ ಪ್ರತಿ ದಿನದಲ್ಲಿಯೂ ಕರ್ತನನ್ನು ಸ್ತುತಿಸಿದರು.
30:22b.2CH.030.022 ಇದಲ್ಲದೆ ಹಿಜ್ಕೀಯನು ಕರ್ತನ ಉತ್ತ ಮವಾದ ಬೋಧನೆಯನ್ನು ಬೋಧಿಸಿದ ಸಮಸ್ತ ಲೇವಿ ಯರಿಗೆ ಸಮಾಧಾನವಾಗಿ ಮಾತನಾಡಿದನು. ಅವರು ಹಬ್ಬವನ್ನು ಏಳು ದಿನಗಳ ಪರ್ಯಂತರ ಭೋಜನ ಮಾಡುತ್ತಾ ಸಮಾಧಾನದ ಬಲಿಗಳನ್ನು ಅರ್ಪಿಸುತ್ತಾ ತಮ್ಮ ಪಿತೃಗಳ ದೇವರಾದ ಕರ್ತನಿಗೆ ಅರಿಕೆಮಾಡುತ್ತಾ ಆಚರಿಸಿದ್ದರು.
30:23b.2CH.030.023 ಆದರೆ ಸಮೂಹವೆಲ್ಲಾ ಮತ್ತೂ ಏಳು ದಿವಸ ಆಚರಿಸುವದಕ್ಕೆ ಯೋಚಿಸಿಕೊಂಡ ಮೇಲೆ ಏಳು ದಿವಸಗಳು ಸಂತೋಷವಾಗಿ ಆಚರಿಸಿದರು.
30:24b.2CH.030.024 ಯೆಹೂದದ ಅರಸನಾದ ಹಿಜ್ಕೀಯನು ಸಭೆಗೆ ಸಾವಿರ ಹೋರಿಗಳನ್ನೂ ಏಳು ಸಾವಿರ ಕುರಿಗಳನ್ನೂ ಕೊಟ್ಟನು. ಇದಲ್ಲದೆ ಪ್ರಧಾನರು ಕೂಟಕ್ಕೆ ಸಾವಿರ ಹೋರಿಗಳನ್ನೂ ಹತ್ತು ಸಾವಿರ ಕುರಿಗಳನ್ನೂ ಕೊಟ್ಟರು. ಯಾಜಕರಲ್ಲಿ ಅನೇಕರು ತಮ್ಮನ್ನು ಪರಿಶುದ್ಧ ಮಾಡಿ ಕೊಂಡರು.
30:25b.2CH.030.025 ಯೆಹೂದದ ಸಭೆಯವರೆ ಲ್ಲರೂ ಯಾಜಕರೂ ಲೇವಿಯರೂ ಇಸ್ರಾಯೇಲಿನಿಂದ ಬಂದ ಸಮಸ್ತ ಸಭೆಯೂ ಇಸ್ರಾಯೇಲಿನ ದೇಶದಿಂದ ಬಂದ ಪರದೇಶಿಗಳೂ ಯೆಹೂದದಲ್ಲಿ ವಾಸವಾಗಿರುವವರೂ ಸಂತೋಷಪಟ್ಟರು.
30:26b.2CH.030.026 ಇಸ್ರಾ ಯೇಲಿನ ಅರಸನಾಗಿರುವ ದಾವೀದನ ಮಗನಾದ ಸೊಲೊಮೋನನ ಕಾಲ ಮೊದಲುಗೊಂಡು ಯೆರೂ ಸಲೇಮಿನಲ್ಲಿ ಇದರ ಹಾಗೆ ನಡೆದಿರಲಿಲ್ಲವಾದದ ರಿಂದ ಹೀಗೆಯೇ ಯೆರೂಸಲೇಮಿನಲ್ಲಿ ಮಹಾ ಸಂತೋಷ ಉಂಟಾಗಿತ್ತು.ಆಗ ಲೇವಿಯರಾದ ಯಾಜಕರೂ ಎದ್ದು ಜನರನ್ನು ಆಶೀರ್ವದಿಸಿದರು. ಅವರ ಶಬ್ದವು ಕೇಳಲ್ಪಟ್ಟಿತು. ಅವರ ಪ್ರಾರ್ಥನೆಯು ಆತನ ಪರಿಶುದ್ಧವಾದ ನಿವಾಸಸ್ಥಾನಕ್ಕೆ ಅಂದರೆ ಪರಲೋಕಕ್ಕೆ ಮುಟ್ಟಿತು.
30:27b.2CH.030.027 ಆಗ ಲೇವಿಯರಾದ ಯಾಜಕರೂ ಎದ್ದು ಜನರನ್ನು ಆಶೀರ್ವದಿಸಿದರು. ಅವರ ಶಬ್ದವು ಕೇಳಲ್ಪಟ್ಟಿತು. ಅವರ ಪ್ರಾರ್ಥನೆಯು ಆತನ ಪರಿಶುದ್ಧವಾದ ನಿವಾಸಸ್ಥಾನಕ್ಕೆ ಅಂದರೆ ಪರಲೋಕಕ್ಕೆ ಮುಟ್ಟಿತು.
31
31:1b.2CH.031.001 ಇದೆಲ್ಲಾ ತೀರಿದ ತರುವಾಯ ಅಲ್ಲಿ ಇರುವವರಾದ ಸಮಸ್ತ ಇಸ್ರಾಯೇಲ್ಯರು ಯೆಹೂ ದದ ಪಟ್ಟಣಗಳಿಗೆ ಹೊರಟು ಹೋಗಿ ವಿಗ್ರಹಗಳನ್ನು ಮುರಿದು ತೋಪುಗಳನ್ನು ಕಡಿದು ಸಮಸ್ತ ಯೆಹೂದ ಬೆನ್ಯಾವಿಾನ್ ಎಫ್ರಾಯಾಮ್ ಮನಸ್ಸೆ ದೇಶಗಳಲ್ಲಿ ಅವುಗಳನ್ನೆಲ್ಲಾ ತೀರಿಸುವ ಪರ್ಯಂತರ ಉನ್ನತ ಸ್ಥಳ ಗಳನ್ನೂ ಬಲಿಪೀಠಗಳನ್ನೂ ಕೆಡವಿಹಾಕಿದರು. ಆಗ ಇಸ್ರಾಯೇಲ್ ಮಕ್ಕಳೆಲ್ಲರು ತಮ್ಮ ತಮ್ಮ ಸ್ವಾಸ್ತ್ಯಗ ಳಿಗೂ ತಮ್ಮ ತಮ್ಮ ಪಟ್ಟಣಗಳಿಗೂ ತಿರಿಗಿಹೋದರು.
31:2b.2CH.031.002 ಹಿಜ್ಕೀಯನು ಅವನವನ ಸೇವೆಯ ಪ್ರಕಾರ ಯಾಜ ಕರ ಲೇವಿಯರ ಸರತಿಗಳನ್ನು ನೇಮಿಸಿದನು. ದಹನ ಬಲಿಗಳನ್ನು ಮತ್ತು ಸಮಾಧಾನದ ಬಲಿಗಳನ್ನು ಅರ್ಪಿ ಸುವದಕ್ಕೂ ಸೇವಿಸುವದಕ್ಕೂ ಕರ್ತನ ಗುಡಾರಗಳ ಬಾಗಲುಗಳಲ್ಲಿ ಸ್ತೋತ್ರ ಮಾಡುವದಕ್ಕೂ ಕೊಂಡಾ ಡುವದಕ್ಕೂ ಯಾಜಕರನ್ನೂ ಲೇವಿಯರನ್ನೂ ನೇಮಿಸಿ ದನು.
31:3b.2CH.031.003 ಅವನು ಕರ್ತನ ನ್ಯಾಯಪ್ರಮಾಣದಲ್ಲಿ ಬರೆದ ಪ್ರಕಾರ ಉದಯಕಾಲದ ಸಾಯಂಕಾಲದ ದಹನ ಬಲಿಗಳಿಗೋಸ್ಕರವೂ ಸಬ್ಬತ್ತುಗಳಲ್ಲಿಯೂ ಅಮವಾಸ್ಯೆ ಗಳಲ್ಲಿಯೂ ನೇಮಿಸಿದ ಹಬ್ಬಗಳಲ್ಲಿಯೂ ಬೇಕಾದ ದಹನಬಲಿಗಳಿಗೋಸ್ಕರವೂ ಅರಸನ ಸ್ಥಿತಿಯಿಂದ ಅವನ ಭಾಗವನ್ನು ನೇಮಿಸಿದನು.
31:4b.2CH.031.004 ಯಾಜಕರೂ ಲೇವಿಯರೂ ಕರ್ತನ ನ್ಯಾಯಪ್ರಮಾಣದಲ್ಲಿ ಬಲ ಗೊಳ್ಳುವ ನಿಮಿತ್ತ ಅವರಿಗೆ ತಕ್ಕ ಭಾಗವನ್ನು ಕೊಡ ಬೇಕೆಂದು ಯೆರೂಸಲೇಮಿನಲ್ಲಿರುವ ಜನರಿಗೆ ಅವನು ಆಜ್ಞಾಪಿಸಿದನು.
31:5b.2CH.031.005 ಈ ಆಜ್ಞೆ ಹೊರಗೆ ಬಂದಾಗಲೇ ಇಸ್ರಾಯೇಲ್ ಮಕ್ಕಳು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು, ಹೊಲಗಳ ಹುಟ್ಟುವಳಿ ಇವುಗಳ ಮೊದಲನೇ ಪಾಲನ್ನು ಬಹಳವಾಗಿ ಒಳಗೆ ತಂದರು. ಹಾಗೆಯೇ ಸಮಸ್ತ ವಸ್ತುಗಳಲ್ಲಿ ದಶಮಾಂಶದ ಪಾಲನ್ನು ಬಹಳ ವಾಗಿ ತಂದರು;
31:6b.2CH.031.006 ಇದಲ್ಲದೆ ಯೆಹೂದ ಪಟ್ಟಣಗಳಲ್ಲಿ ನಿವಾಸವಾಗಿರುವ ಇಸ್ರಾಯೇಲ್ ಯೆಹೂದ ಮಕ್ಕಳು ದನಗಳಲ್ಲಿಯೂ ಕುರಿಗಳಲ್ಲಿಯೂ ದಶಮಾಂಶ ತಂದರು. ತಮ್ಮ ದೇವರಾದ ಕರ್ತನಿಗೆ ಪರಿಶುದ್ಧ ಮಾಡಿದ ಪರಿಶುದ್ಧ ವಸ್ತುಗಳಲ್ಲಿ ದಶ ಮಾಂಶದ ಪಾಲು ತಂದು ರಾಶಿರಾಶಿಯಾಗಿ ಇಟ್ಟರು.
31:7b.2CH.031.007 ಮೂರನೇ ತಿಂಗಳಲ್ಲಿ ರಾಶಿಗಳ ತಳಹದಿ ಆರಂಭಿಸಿ ಏಳನೇ ತಿಂಗಳಲ್ಲಿ ತೀರಿಸಿದರು.
31:8b.2CH.031.008 ಹಿಜ್ಕೀಯನೂ ಪ್ರಧಾನರೂ ಬಂದು ರಾಶಿಗಳನ್ನು ನೋಡಿದಾಗ ಅವರು ಕರ್ತನನ್ನೂ ಆತನ ಜನವಾದ ಇಸ್ರಾಯೇ ಲನ್ನೂ ಸ್ತುತಿಸಿದರು.
31:9b.2CH.031.009 ಆಗ ಹಿಜ್ಕೀಯನು ರಾಶಿಗಳನ್ನು ಕುರಿತು ಯಾಜಕರನ್ನೂ ಲೇವಿಯರನ್ನೂ ವಿಚಾರಿಸಿದನು.
31:10b.2CH.031.010 ಚಾದೋಕನ ಮನೆಯವನಾಗಿರುವ ಪ್ರಧಾನ ಯಾಜಕನಾದ ಅಜರ್ಯನು ಅವನಿಗೆ -- ಕರ್ತನ ಮನೆಗೆ ಕಾಣಿಕೆಗಳನ್ನು ತರಲು ಆರಂಭಿಸಿದಂದಿನಿಂದ ನಿಮಗೆ ತಿನ್ನುವದಕ್ಕೆ ಸಂಪೂರ್ಣವಿತ್ತು; ಉಳಿದದ್ದು ಬಹಳವಾಯಿತು; ಯಾಕಂದರೆ ಕರ್ತನು ತನ್ನ ಜನ ರನ್ನು ಆಶೀರ್ವದಿಸಿದ್ದಾನೆ. ಆದದರಿಂದ ಉಳಿದದ್ದು ಈ ರಾಶಿಯಾಯಿತು ಎಂದು ಹೇಳಿದನು.
31:11b.2CH.031.011 ಆಗ ಹಿಜ್ಕೀಯನು ಕರ್ತನ ಮನೆಯಲ್ಲಿ ಉಗ್ರಾಣಗಳನ್ನು ಸಿದ್ಧಮಾಡಲು ಹೇಳಿದನು.
31:12b.2CH.031.012 ಅವರು ಅವುಗಳನ್ನು ಸಿದ್ಧಮಾಡಿದ ಮೇಲೆ ಕಾಣಿಕೆಗಳನ್ನೂ ದಶಮಾಂಶ ವನ್ನೂ ಪ್ರತಿಷ್ಠಿಸಲ್ಪಟ್ಟವುಗಳನ್ನೂ ನಂಬಿಕೆಯಾಗಿ ಒಳಗೆ ತಂದರು. ಇವುಗಳ ಮೇಲೆ ಲೇವಿಯನಾದ ಕೋನನ್ಯನು ಅಧಿಕಾರಿಯಾಗಿದ್ದನು. ಅವನ ತರು ವಾಯ ಸಹೋದರನಾದ ಶಿಮ್ಮಿಯು ಅಧಿಕಾರಿಯಾಗಿ ದ್ದನು.
31:13b.2CH.031.013 ಇದಲ್ಲದೆ ಅರಸನಾದ ಹಿಜ್ಕೀಯನ ಅಪ್ಪಣೆ ಯಿಂದಲೂ ದೇವರ ಆಲಯದ ಅಧಿಕಾರಿಯಾದ ಅಜರ್ಯನ ಅಪ್ಪಣೆಯಿಂದಲೂ ಯೆಹೀಯೇಲನೂ ಅಜಜ್ಯನೂ ನಹತನೂ ಅಸಾಹೇಲನೂ ಯೆರೀಮೋ ತನೂ, ಯೋಜಾಬಾದನೂ, ಎಲೀಯೇಲನೂ, ಇಸ್ಮ ಕ್ಯನೂ ಮಹತನೂ ಬೆನಾಯನೂ ಇವರು ಕೋನನ್ಯನ ಅವನ ಸಹೋದರನಾದ ಶಿಮ್ಮಿಯ ಕೈಕೆಳಗೆ ವಿಚಾರಣಾ ಕರ್ತರಾಗಿದ್ದರು.
31:14b.2CH.031.014 ಇದಲ್ಲದೆ ಲೇವಿಯನಾಗಿರುವ ಇಮ್ನನ ಮಗನಾದ ಕೋರೆ ಎಂಬವನು ಪೂರ್ವದಿಕ್ಕಿ ನಲ್ಲಿರುವ ದ್ವಾರಪಾಲಕನು ಕರ್ತನ ಕಾಣಿಕೆಗಳನ್ನೂ ಮಹಾ ಪರಿಶುದ್ಧವಾದವುಗಳನ್ನೂ ಪಾಲು ಹಂಚುವ ದಕ್ಕೆ ದೇವರಿಗೆ ಉಚಿತಾರ್ಥವಾಗಿ ಅರ್ಪಿಸಿದ ಅರ್ಪಣೆ ಗಳ ಮೇಲೆ ಇದ್ದನು.
31:15b.2CH.031.015 ಇವನ ತರುವಾಯ ಯಾಜಕರ ಪಟ್ಟಣಗಳಲ್ಲಿ ತಮ್ಮ ಸಹೋದರರಿಗೆ ಸರತಿ ಸರತಿಯಾಗಿ ಹಿರಿಯರಿಗೂ ಕಿರಿಯರಿಗೂ ಪಾಲು ಹಂಚುವದಕ್ಕೆ ಎದೆನನೂ ವಿಾನ್ಯವಿಾನನೂ ಯೇಷೂವನೂ ಶೆಮಾ ಯನೂ ಅಮರ್ಯನೂ ಶೆಕನ್ಯನೂ ಇದ್ದರು.
31:16b.2CH.031.016 ಲೆಕ್ಕ ದಲ್ಲಿ ಬರೆಯಲ್ಪಟ್ಟ ಮೂರು ವರುಷ ಪ್ರಾಯ ಮೊದಲು ಗೊಂಡು ಮೇಲಿರುವ ಗಂಡು ಮಕ್ಕಳು ಹೊರತಾಗಿ ಕರ್ತನ ಮನೆಯಲ್ಲಿ ಪ್ರವೇಶಿಸುವವರೆಲ್ಲರಿಗೆ ಅವರ ಕೆಲಸಗಳಲ್ಲಿ ಅವರ ಸರತಿಗಳ ಪ್ರಕಾರ ಅವರ ಸೇವೆಗೆ ಅವರವರ ದಿನದ ಭಾಗವನ್ನು ಕೊಡುವದಕ್ಕೂ
31:17b.2CH.031.017 ಹಾಗೆಯೇ ಇಪ್ಪತ್ತು ವರುಷ ಪ್ರಾಯ ಮೊದಲು ಗೊಂಡು ಅವರ ತಂದೆಗಳ ಮನೆಯ ಹಾಗೆ ಬರೆಯ ಲ್ಪಟ್ಟ ಅವರವರ ಕೆಲಸಗಳಲ್ಲಿಯೂ ಅವರವರ ಸರತಿ ಗಳಲ್ಲಿಯೂ ಇರುವ ಯಾಜಕರಿಗೂ ಲೇವಿಯ ರಿಗೂ
31:18b.2CH.031.018 ಅವರ ಸಮಸ್ತ ಕೂಟದಲ್ಲಿ ಲೆಕ್ಕದೊಳಗೆ ಬರೆ ಯಲ್ಪಟ್ಟ ಅವರ ಚಿಕ್ಕವರಿಗೂ ಹೆಂಡತಿಯರಿಗೂ ಕುಮಾರರಿಗೂ ಕುಮಾರ್ತೆಯರಿಗೂ ಕೊಡುವದಕ್ಕೆ ಇದ್ದರು. ಅವರು ತಮ್ಮ ಉದ್ಯೋಗದಲ್ಲಿ ತಮ್ಮನ್ನು ಪರಿಶುದ್ಧತೆಯಲ್ಲಿ ಪರಿಶುದ್ಧ ಮಾಡಿಕೊಂಡರು.
31:19b.2CH.031.019 ಇದ ಲ್ಲದೆ ಯಾಜಕರಲ್ಲಿರುವ ಸಮಸ್ತ ಗಂಡಸರಿಗೂ ಲೇವಿ ಯರಲ್ಲಿ ಬರೆಯಲ್ಪಟ್ಟಿದ್ದ ಸಮಸ್ತರಿಗೂ ಪಾಲನ್ನು ಕೊಡುವದಕ್ಕೆ ತಮ್ಮ ಪಟ್ಟಣಗಳ ವಲಯಗಳಲ್ಲಿರುವ ಯಾಜಕರಾದ ಆರೋನನ ಮಕ್ಕಳಲ್ಲಿ ಹೆಸರಿನಿಂದ ಬರೆಯಲ್ಪಟ್ಟ ಮನುಷ್ಯರು ಪ್ರತಿ ಪಟ್ಟಣದಲ್ಲಿ ಇದ್ದರು.
31:20b.2CH.031.020 ಹೀಗೆಯೇ ಹಿಜ್ಕೀಯನು ಸಮಸ್ತ ಯೆಹೂದದಲ್ಲಿ ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಉತ್ತಮವಾದ ದ್ದನ್ನೂ ಸರಿಯಾದದ್ದನ್ನೂ ಸತ್ಯವಾದದ್ದನ್ನೂ ನಡಿಸಿ ದನು.ಇದಲ್ಲದೆ ದೇವರ ಆಲಯದ ಸೇವೆಯ ಲ್ಲಿಯೂ ನ್ಯಾಯಪ್ರಮಾಣದಲ್ಲಿಯೂ ಆಜ್ಞೆಗಳಲ್ಲಿಯೂ ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳಲ್ಲಿ ಅವನು ತನ್ನ ಪೂರ್ಣಹೃದಯದಿಂದ ಮಾಡಿ ವೃದ್ಧಿಹೊಂದಿದನು.
31:21b.2CH.031.021 ಇದಲ್ಲದೆ ದೇವರ ಆಲಯದ ಸೇವೆಯ ಲ್ಲಿಯೂ ನ್ಯಾಯಪ್ರಮಾಣದಲ್ಲಿಯೂ ಆಜ್ಞೆಗಳಲ್ಲಿಯೂ ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳಲ್ಲಿ ಅವನು ತನ್ನ ಪೂರ್ಣಹೃದಯದಿಂದ ಮಾಡಿ ವೃದ್ಧಿಹೊಂದಿದನು.
32
32:1b.2CH.032.001 ಈ ಕಾರ್ಯಗಳೂ ಇವುಗಳ ಸ್ಥಾಪನೆಯೂ ಆದ ತರುವಾಯ ಅಶ್ಶೂರಿನ ಅರಸನಾದ ಸನ್ಹೇರೀಬನು ಹೊರಟು ಬಂದು ಯೆಹೂದದಲ್ಲಿ ಪ್ರವೇಶಿಸಿ ಕೋಟೆಯುಳ್ಳ ಪಟ್ಟಣಗಳ ಬಳಿಯಲ್ಲಿ ದಂಡಿಳಿದು ಅವುಗಳನ್ನು ತನಗಾಗಿ ಜಯಿಸಬೇಕೆಂದು ಅಂದುಕೊಂಡನು.
32:2b.2CH.032.002 ಸನ್ಹೇರೀಬನು ಬಂದದ್ದನ್ನೂ ಅವನು ಯೆರೂಸಲೇಮಿನ ಮೇಲೆ ಯುದ್ಧಮಾಡಲು ಮುಖ ತಿರುಗಿಸಿದ್ದನ್ನೂ ಹಿಜ್ಕೀಯನು ಕಂಡಾಗ
32:3b.2CH.032.003 ಅವನು ಪಟ್ಟಣದ ಹೊರಗಿರುವ ನೀರು ಬುಗ್ಗೆಗ ಳನ್ನು ಮುಚ್ಚಿಸುವದಕ್ಕೆ ತನ್ನ ಪ್ರಧಾನರ ಸಂಗಡಲೂ ತನ್ನ ಪರಾಕ್ರಮಶಾಲಿಗಳ ಸಂಗಡಲೂ ಯೋಚಿಸಿ ಕೊಂಡನು. ಅವರು ಅವನಿಗೆ ಸಹಾಯಕೊಟ್ಟರು.
32:4b.2CH.032.004 ಆದದರಿಂದ ಅನೇಕ ಜನರು ಕೂಡಿಕೊಂಡು ನೀರು ಬುಗ್ಗೆಗಳನ್ನೂ ದೇಶದ ಮಧ್ಯದಲ್ಲಿ ಹರಿಯುವ ಹಳ್ಳ ವನ್ನೂ ಮುಚ್ಚಿಬಿಟ್ಟು--ಅಶ್ಶೂರಿನ ಅರಸುಗಳು ಬಂದು ಬಹಳ ನೀರು ದೊರಕಿಸಿಕೊಳ್ಳುವದು ಯಾಕೆ ಅಂದರು.
32:5b.2CH.032.005 ಇದಲ್ಲದೆ ಅವನು ತನ್ನನ್ನು ಬಲಪಡಿಸಿಕೊಂಡು ಕೆಡವಲ್ಪಟ್ಟ ಗೋಡೆಯನ್ನೆಲ್ಲಾ ಕಟ್ಟಿಸಿ ಗೋಪುರಗಳ ಪರ್ಯಂತರ ಅದನ್ನು ಎತ್ತರ ಮಾಡಿ ಅದರ ಹೊರ ಭಾಗದಲ್ಲಿ ಮತ್ತೊಂದು ಗೋಡೆಯನ್ನು ಕಟ್ಟಿಸಿ ದಾವೀ ದನ ಪಟ್ಟಣದಲ್ಲಿರುವ ಮಿಲ್ಲೋವನ್ನು ದುರಸ್ತುಮಾಡಿ ಈಟಿಗಳನ್ನೂ ಗುರಾಣಿಗಳನ್ನೂ ಬಹಳವಾಗಿ ಮಾಡಿಸಿ ದನು.
32:6b.2CH.032.006 ಜನರ ಮೇಲೆ ಯುದ್ಧದ ಸೈನ್ಯಗಳ ಅಧಿಪತಿ ಗಳನ್ನು ಇರಿಸಿ ಪಟ್ಟಣದ ಬಾಗಲ ಬೀದಿಯಲ್ಲಿ ತನ್ನ ಬಳಿಗೆ ಅವರನ್ನು ಕೂಡಿಸಿಕೊಂಡು ಸಮಾಧಾನವಾಗಿ ಅವರ ಸಂಗಡ ಮಾತನಾಡಿ--
32:7b.2CH.032.007 ಬಲಗೊಳ್ಳಿರಿ; ಧೈರ್ಯ ವಾಗಿರ್ರಿ; ಅಶ್ಶೂರಿನ ಅರಸನ ನಿಮಿತ್ತವೂ ಅವನ ಸಂಗಡ ಕೂಡಿರುವ ಮಹಾಗುಂಪಿನ ನಿಮಿತ್ತವೂ ಭಯ ಪಡಬೇಡಿರಿ; ಹೆದರಬೇಡಿರಿ. ಯಾಕಂದರೆ ಅವನ ಸಂಗಡ ಇರುವವರಿಗಿಂತ ನಮ್ಮ ಸಂಗಡ ಅನೇಕರು ಇದ್ದಾರೆ.
32:8b.2CH.032.008 ಅವನ ಸಂಗಡ ಮಾಂಸದ ತೋಳು; ಆದರೆ ನಮ್ಮ ಸಂಗಡ ನಮಗೆ ಸಹಾಯ ಕೊಡುವದಕ್ಕೂ ನಮ್ಮ ಯುದ್ಧಗಳನ್ನು ನಡಿಸುವದಕ್ಕೂ ನಮ್ಮ ದೇವರಾದ ಕರ್ತನು ತಾನೇ ಇದ್ದಾನೆ ಎಂದು ಹೇಳಿದನು. ಆದ ದರಿಂದ ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳಲ್ಲಿ ಆತುಕೊಂಡರು.
32:9b.2CH.032.009 ಇದರ ತರುವಾಯ ಅಶ್ಶೂರಿನ ಅರಸನಾದ ಸನ್ಹೇ ರೀಬನೂ ಅವನ ಸಂಗಡ ಕೂಡಿರುವ ಅವನ ಸಮಸ್ತ ಬಲವೂ ಲಾಕೀಷನ್ನು ಮುತ್ತಿಗೆ ಹಾಕಿದಾಗ ಅವನು ಯೆರೂಸಲೇಮಿನಲ್ಲಿ ಯೆಹೂದದ ಅರಸನಾದ ಹಿಜ್ಕೀ ಯನ ಬಳಿಗೂ ಯೆರೂಸಲೇಮಿನಲ್ಲಿರುವ ಸಮಸ್ತ ಯೆಹೂದದವರ ಬಳಿಗೂ ತನ್ನ ಸೇವಕರನ್ನು ಕಳು ಹಿಸಿ--ಅಶ್ಶೂರಿನ ಅರಸನಾದ ಸನ್ಹೇರೀಬನು ಹೀಗೆ ಹೇಳುತ್ತಾನೆ--
32:10b.2CH.032.010 ನೀವು ಯೆರೂಸಲೇಮಿನ ಮುತ್ತಿಗೆ ಯಲ್ಲಿ ವಾಸವಾಗಿರುವ ಹಾಗೆ ಯಾವದರ ಮೇಲೆ ಭರವಸವುಳ್ಳವರಾಗಿದ್ದೀರಿ?
32:11b.2CH.032.011 ನಮ್ಮ ದೇವರಾದ ಕರ್ತನು ಅಶ್ಶೂರಿನ ಅರಸನ ಕೈಯಿಂದ ನಮ್ಮನ್ನು ಬಿಡಿಸುವನೆಂದು ಹಿಜ್ಕೀಯನು ಹೇಳಿ ಹಸಿವೆ ಯಿಂದಲೂ ದಾಹದಿಂದಲೂ ಸಾಯುವದಕ್ಕೆ ನಿಮ್ಮನ್ನು ಒಪ್ಪಿಸಿಕೊಡಲು ಪ್ರೇರೇಪಿಸುತ್ತಾನಲ್ಲವೇ?
32:12b.2CH.032.012 ಈ ಹಿಜ್ಕೀಯನು ಉನ್ನತ ಸ್ಥಳಗಳನ್ನೂ ಬಲಿಪೀಠಗಳನ್ನೂ ತೆಗೆದುಹಾಕಿ ಯೆಹೂದದವರಿಗೂ ಯೆರೂಸಲೇಮಿ ನವರಿಗೂ--ನೀವು ಒಂದೇ ಬಲಿಪೀಠದ ಮುಂದೆ ಅಡ್ಡಬಿದ್ದು ಅದರ ಮೇಲೆ ಧೂಪವನ್ನರ್ಪಿಸಬೇಕೆಂದು ಹೇಳಿದ್ದಾನಲ್ಲವೇ?
32:13b.2CH.032.013 ನಾನೂ ನನ್ನ ಪಿತೃಗಳೂ ದೇಶ ಗಳ ಜನರಿಗೆ ಮಾಡಿದ್ದನ್ನು ನೀವು ತಿಳಿಯಲಿಲ್ಲವೋ? ಆ ದೇಶಗಳ ಜನಾಂಗಗಳ ದೇವರುಗಳು ಆ ದೇಶ ಗಳನ್ನು ನನ್ನ ಕೈಯೊಳಗಿಂದ ಹೇಗಾದರೂ ಬಿಡಿಸಲು ಸಾಮರ್ಥ್ಯವುಳ್ಳವುಗಳಾಗಿದ್ದವೋ?
32:14b.2CH.032.014 ನನ್ನ ಪಿತೃಗಳು ನಿರ್ಮೂಲ ಮಾಡಿದ ಆ ಜನಾಂಗಗಳ ಸಮಸ್ತ ದೇವ ರುಗಳಲ್ಲಿ ನನ್ನ ಕೈಯೊಳಗಿಂದ ತನ್ನ ಜನರನ್ನು ಬಿಡಿಸಲು ಸಾಮರ್ಥ್ಯವುಳ್ಳದ್ದು ಯಾವದು? ಹಾಗಾದರೆ ನಿಮ್ಮ ದೇವರು ನನ್ನ ಕೈಯೊಳಗಿಂದ ನಿಮ್ಮನ್ನು ಹೇಗೆ ಬಿಡಿಸ ಬಹುದು?
32:15b.2CH.032.015 ಆದದರಿಂದ ಹಿಜ್ಕೀಯನು ನಿಮ್ಮನ್ನು ವಂಚಿಸಿ ಈ ಪ್ರಕಾರ ನಿಮ್ಮನ್ನು ಪ್ರೇರೇಪಿಸದಿರಲಿ; ಅವನ ಮಾತು ನಂಬಬೇಡಿರಿ. ಯಾಕಂದರೆ ನನ್ನ ಕೈಯೊಳಗಿಂದಲೂ ನನ್ನ ಪಿತೃಗಳ ಕೈಯೊಳಗಿಂದಲೂ ತಮ್ಮ ಜನರನ್ನು ಬಿಡಿಸಲು ಸಕಲ ಜನಾಂಗ, ರಾಜ್ಯಗಳ ದೇವರುಗಳಲ್ಲಿ ಸಾಮರ್ಥ್ಯವುಳ್ಳ ದೇವರು ಒಂದೂ ಇಲ್ಲ. ನನ್ನ ಕೈಯೊಳಗಿಂದ ನಿಮ್ಮನ್ನು ಬಿಡಿಸಲು ನಿಮ್ಮ ದೇವರು ಎಷ್ಟರವನು ಅನ್ನುತ್ತಾನೆ.
32:16b.2CH.032.016 ಹೀಗೆ ಅವನ ಸೇವಕರು ಇನ್ನೂ ಕರ್ತನಾದ ದೇವರಿಗೆ ವಿರೋಧ ವಾಗಿಯೂ ಆತನ ಸೇವಕನಾದ ಹೀಜ್ಕೀಯನಿಗೆ ವಿರೋ ಧವಾಗಿಯೂ ಮಾತನಾಡಿದರು.
32:17b.2CH.032.017 ಇದಲ್ಲದೆ ಅವನು ಇಸ್ರಾಯೇಲಿನ ದೇವರಾದ ಕರ್ತನನ್ನು ನಿಂದಿಸುವ ದಕ್ಕೂ ಆತನಿಗೆ ವಿರೋಧವಾಗಿ ಮಾತನಾಡುವದಕ್ಕೂ ಪತ್ರಗಳನ್ನು ಬರೆದನು. ಏನಂದರೆ--ಇತರ ದೇಶಗಳ ಜನಾಂಗಗಳ ದೇವರುಗಳು ತಮ್ಮ ಜನರನ್ನು ನನ್ನ ಕೈಯೊಳಗಿಂದ ಹೇಗೆ ಬಿಡಿಸಲಿಲ್ಲವೋ ಹಾಗೆಯೇ ಹಿಜ್ಕೀಯನ ದೇವರು ತನ್ನ ಜನರನ್ನು ನನ್ನ ಕೈಯೊಳಗಿಂದ ಬಿಡಿಸಲಾರನು.
32:18b.2CH.032.018 ಇದಲ್ಲದೆ ಅವರು ಪಟ್ಟಣ ವನ್ನು ಹಿಡಿಯುವ ಹಾಗೆ ಗೋಡೆಯ ಮೇಲೆ ಇರುವ ಯೆರೂಸಲೇಮಿನಲ್ಲಿರುವ ಜನರನ್ನು ಭಯಪಡಿಸುವ ದಕ್ಕೂ ಅವರನ್ನು ಕಳವಳಪಡಿಸುವದಕ್ಕೂ ಯೆಹೂದ್ಯರ ಭಾಷೆಯಲ್ಲಿ ಗಟ್ಟಿಯಾದ ಶಬ್ದದಿಂದ ಕೂಗಿ ಹೇಳಿ ದರು.
32:19b.2CH.032.019 ಮನುಷ್ಯರ ಕೈ ಕೆಲಸವಾದ ಭೂಮಿಯ ಜನಗಳ ದೇವರುಗಳಿಗೆ ವಿರೋಧವಾಗಿ ಮಾತನಾಡಿದ ಹಾಗೆ ಯೆರೂಸಲೇಮಿನ ದೇವರಿಗೆ ವಿರೋಧವಾಗಿ ಮಾತನಾಡಿದರು.
32:20b.2CH.032.020 ಇದರ ನಿಮಿತ್ತ ಅರಸನಾದ ಹಿಜ್ಕೀಯನೂ ಆಮೋ ಚನ ಮಗನಾಗಿರುವ ಪ್ರವಾದಿಯಾದ ಯೆಶಾಯನೂ ಪ್ರಾರ್ಥನೆಮಾಡಿ ಪರಲೋಕಕ್ಕೆ ಕೂಗಿದರು.
32:21b.2CH.032.021 ಆಗ ಕರ್ತನು ತನ್ನ ದೂತನನ್ನು ಕಳುಹಿಸಿದನು; ಅವನು ಅಶ್ಶೂರಿನ ಅರಸನ ದಂಡಿನಲ್ಲಿರುವ ಸಮಸ್ತ ಪರಾ ಕ್ರಮಶಾಲಿಗಳನ್ನೂ ನಾಯಕರನ್ನೂ ಅಧಿಪತಿಗಳನ್ನೂ ನಿರ್ಮೂಲಮಾಡಿದನು. ಹೀಗೆ ಇವನು ಲಜ್ಜಾ ಮುಖದಿಂದ ತನ್ನ ದೇಶಕ್ಕೆ ತಿರುಗಿದನು. ಅವನು ತನ್ನ ದೇವರ ಮನೆಯಲ್ಲಿ ಪ್ರವೇಶಿಸಿದಾಗ ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಕತ್ತಿಯಿಂದ ಕೊಂದುಹಾಕಿದರು.
32:22b.2CH.032.022 ಹೀಗೆಯೇ ಕರ್ತನು ಹಿಜ್ಕೀಯ ನನ್ನೂ ಯೆರೂಸಲೇಮಿನ ನಿವಾಸಿಗಳನ್ನೂ ಅಶ್ಶೂರಿನ ಅರಸನಾದ ಸನ್ಹೇರೀಬನ ಕೈಯೊಳಗಿಂದಲೂ ಸಮಸ್ತರ ಕೈಯೊಳಗಿಂದಲೂ ರಕ್ಷಿಸಿ ಸಮಸ್ತ ಕಡೆಯಿಂದ ಅವ ರನ್ನು ನಡಿಸಿದನು.
32:23b.2CH.032.023 ಅನೇಕರು ಯೆರೂಸಲೇಮಿ ನಲ್ಲಿರುವ ಕರ್ತನಿಗೆ ಅರ್ಪಣೆಗಳನ್ನೂ ಯೆಹೂದದ ಅರಸನಾದ ಹಿಜ್ಕೀಯನಿಗೆ ವಸ್ತುಗಳನ್ನೂ ತಂದರು. ಅಂದಿನಿಂದ ಅವನು ಸಮಸ್ತ ಜನಾಂಗಗಳ ಸಮ್ಮುಖ ದಲ್ಲಿ ಉನ್ನತಕ್ಕೇರಿಸಲ್ಪಟ್ಟನು.
32:24b.2CH.032.024 ಆ ದಿನಗಳಲ್ಲಿ ಹಿಜ್ಕೀಯನು ಸಾಯುವ ರೋಗ ದಲ್ಲಿದ್ದದ್ದರಿಂದ ಅವನು ಕರ್ತನಿಗೆ ಪ್ರಾರ್ಥನೆ ಮಾಡಿ ದನು. ಆಗ ಆತನು ಅವನ ಸಂಗಡ ಮಾತನಾಡಿ ಅವನಿಗೆ ಗುರುತನ್ನು ಕೊಟ್ಟನು.
32:25b.2CH.032.025 ಆದರೆ ಹಿಜ್ಕೀ ಯನು ತನಗೆ ಆದ ಉಪಕಾರಕ್ಕೆ ತಕ್ಕಂತೆ ನಡೆಯದೆ ಇದ್ದನು; ಅವನ ಹೃದಯದಲ್ಲಿ ಅಹಂಕಾರ ತುಂಬಿತ್ತು; ಆದದರಿಂದ ಅವನ ಮೇಲೆಯೂ ಯೆಹೂದ ಯೆರೂ ಸಲೇಮಿನ ಮೇಲೆಯೂ ರೌದ್ರ ಉಂಟಾಯಿತು.
32:26b.2CH.032.026 ಆದಾಗ್ಯೂ ಹಿಜ್ಕೀಯನೂ ಯೆರೂಸಲೇಮಿನ ನಿವಾಸಿಗಳೂ ತಮ್ಮ ಹೃದಯದ ಗರ್ವದ ವಿಷಯ ತಮ್ಮನ್ನು ತಾವು ತಗ್ಗಿಸಿಕೊಂಡದ್ದರಿಂದ ಹಿಜ್ಕೀಯನ ದಿವಸಗಳಲ್ಲಿ ಕರ್ತನ ರೌದ್ರವು ಅವರ ಮೇಲೆ ಬರಲಿಲ್ಲ.
32:27b.2CH.032.027 ಹಿಜ್ಕೀಯನಿಗೆ ಅತ್ಯಧಿಕವಾದ ಐಶ್ವರ್ಯವೂ ಘನವೂ ಇದ್ದದ್ದರಿಂದ ಅವನು ಬೆಳ್ಳಿಬಂಗಾರ ರತ್ನ ಸುಗಂಧದ್ರವ್ಯ ಗುರಾಣಿಗಳಿಗೋಸ್ಕರವೂ ಎಲ್ಲಾ ವಿಧದ ಮನೋಹರವಾದ ಆಭರಣಗಳಿಗೋಸ್ಕರವೂ ತನಗೆ ಬೊಕ್ಕಸಗಳನ್ನು ಕಟ್ಟಿಸಿದನು.
32:28b.2CH.032.028 ಇದಲ್ಲದೆ ಧಾನ್ಯದ ಹುಟ್ಟುವಳಿಯೂ ದ್ರಾಕ್ಷಾರಸವೂ ಎಣ್ಣೆಯೂ ಇವುಗಳ ನಿಮಿತ್ತವಾಗಿ ಉಗ್ರಾಣಗಳನ್ನೂ ಸಕಲವಿಧ ವಾದ ಪಶುಗಳ ನಿಮಿತ್ತವಾಗಿ ಕೊಟ್ಟಿಗೆಗಳನ್ನೂ ಕುರಿ ಮಂದೆಯ ನಿಮಿತ್ತವಾಗಿ ಹಟ್ಟಿಗಳನ್ನೂ ಮಾಡಿದನು.
32:29b.2CH.032.029 ಇದಲ್ಲದೆ ತನಗೆ ಪಟ್ಟಣಗಳನ್ನೂ ದನಕುರಿಗಳ ಸ್ವಾಸ್ತ್ಯವನ್ನೂ ಬಹಳವಾಗಿ ಮಾಡಿಕೊಂಡನು. ದೇವರು ಅವನಿಗೆ ಬಹು ಹೆಚ್ಚಾಗಿ ಸಂಪತ್ತನ್ನು ಕೊಟ್ಟನು.
32:30b.2CH.032.030 ಈ ಹಿಜ್ಕೀಯನು ಗೀಹೋನೆಂಬ ಮೇಲಿನ ಕಾಲುವೆಯನ್ನು ಮುಚ್ಚಿಬಿಟ್ಟು ಅದನ್ನು ದಾವೀದನ ಪಟ್ಟಣದಲ್ಲಿ ಪಶ್ಚಿಮ ದಿಕ್ಕಿಗೆ ಕಾಲುವೆಯಾಗಿ ಬರಮಾಡಿದನು. ಹೀಗೆಯೇ ಹಿಜ್ಕೀಯನು ತನ್ನ ಸಮಸ್ತ ಕ್ರಿಯೆಗಳಲ್ಲಿ ವೃದ್ಧಿಹೊಂದಿ ದನು.
32:31b.2CH.032.031 ಆದರೆ ದೇಶದಲ್ಲಿ ಅದ್ಭುತಕ್ಕೋಸ್ಕರ ವಿಚಾ ರಣೆ ಮಾಡಲು ಬಾಬೆಲಿನ ಅಧಿಪತಿಗಳಿಂದ ತನ್ನ ಬಳಿಗೆ ಕಳುಹಿಸಲ್ಪಟ್ಟ ರಾಯಭಾರಿಗಳ ಕಾರ್ಯದಲ್ಲಿ ಅವನು ತನ್ನ ಹೃದಯದೊಳಗಿದ್ದದ್ದನ್ನೆಲ್ಲಾ ತಿಳುಕೊಳ್ಳುವ ಹಾಗೆ ಅವನನ್ನು ಶೋಧಿಸುವದಕ್ಕೆ ದೇವರು ಅವನನ್ನು ಬಿಟ್ಟುಬಿಟ್ಟನು.
32:32b.2CH.032.032 ಹಿಜ್ಕೀಯನ ಮಿಕ್ಕಾದ ಕಾರ್ಯಗಳೂ ಅವನ ಒಳ್ಳೆಯತನವೂ ಇಗೋ, ಅವು ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನ ದರ್ಶನದ ಪುಸ್ತಕ ದಲ್ಲಿಯೂ ಯೆಹೂದ ಇಸ್ರಾಯೇಲ್ ಅರಸುಗಳ ಪುಸ್ತಕದಲ್ಲಿಯೂ ಬರೆಯಲ್ಪಟ್ಟಿವೆ.ಹಿಜ್ಕೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ದಾವೀದನ ಮಕ್ಕಳ ಸಮಾಧಿಗಳಲ್ಲಿರುವ ಶ್ರೇಷ್ಠವಾದದರಲ್ಲಿ ಅವ ನನ್ನು ಹೂಣಿಟ್ಟರು. ಅವನ ಮರಣದಲ್ಲಿ ಸಮಸ್ತ ಯೆಹೂದದವರೂ ಯೆರೂಸಲೇಮಿನ ನಿವಾಸಿಗಳೂ ಅವನನ್ನು ಘನಪಡಿಸಿದರು. ಅವನ ಮಗನಾದ ಮನ ಸ್ಸೆಯು ಅವನಿಗೆ ಬದಲಾಗಿ ಆಳಿದನು.
32:33b.2CH.032.033 ಹಿಜ್ಕೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ದಾವೀದನ ಮಕ್ಕಳ ಸಮಾಧಿಗಳಲ್ಲಿರುವ ಶ್ರೇಷ್ಠವಾದದರಲ್ಲಿ ಅವ ನನ್ನು ಹೂಣಿಟ್ಟರು. ಅವನ ಮರಣದಲ್ಲಿ ಸಮಸ್ತ ಯೆಹೂದದವರೂ ಯೆರೂಸಲೇಮಿನ ನಿವಾಸಿಗಳೂ ಅವನನ್ನು ಘನಪಡಿಸಿದರು. ಅವನ ಮಗನಾದ ಮನ ಸ್ಸೆಯು ಅವನಿಗೆ ಬದಲಾಗಿ ಆಳಿದನು.
33
33:1b.2CH.033.001 ಮನಸ್ಸೆಯು ಆಳಲು ಆರಂಭಿಸಿದಾಗ ಹನ್ನೆರಡು ವರುಷದವನಾಗಿದ್ದು ಯೆರೂ ಸಲೇಮಿನಲ್ಲಿ ಐವತ್ತೈದು ವರುಷ ಆಳಿದನು.
33:2b.2CH.033.002 ಆದರೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಜನಾಂಗಗಳ ಅಸಹ್ಯಗಳ ಪ್ರಕಾರವೇ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು.
33:3b.2CH.033.003 ಏನಂದರೆ, ಅವನು ತನ್ನ ತಂದೆಯಾದ ಹಿಜ್ಕೀಯನು ಕೆಡವಿಹಾಕಿದ ಉನ್ನತ ಸ್ಥಳಗಳನ್ನು ತಿರಿಗಿ ಕಟ್ಟಿಸಿ ಬಾಳನಿಗೆ ಬಲಿಪೀಠ ಗಳನ್ನು ಎಬ್ಬಿಸಿ ತೋಪುಗಳನ್ನು ಹಾಕಿ ಆಕಾಶದ ಸೈನ್ಯ ಕ್ಕೆಲ್ಲಾ ಅಡ್ಡಬಿದ್ದು ಅವುಗಳನ್ನು ಸೇವಿಸಿದನು.
33:4b.2CH.033.004 ಇದ ಲ್ಲದೆ--ಯೆರೂಸಲೇಮಿನಲ್ಲಿ ನನ್ನ ಹೆಸರು ಯುಗ ಯುಗಕ್ಕೂ ಇರುವದೆಂದು ಕರ್ತನು ಹೇಳಿದ ಕರ್ತನ ಆಲಯದಲ್ಲಿ ಬಲಿಪೀಠಗಳನ್ನು ಕಟ್ಟಿಸಿದನು.
33:5b.2CH.033.005 ಕರ್ತನ ಆಲಯದ ಎರಡು ಅಂಗಳಗಳಲ್ಲಿ ಆಕಾಶದ ಎಲ್ಲಾ ಸೈನ್ಯಕ್ಕೋಸ್ಕರ ಬಲಿಪೀಠಗಳನ್ನು ಕಟ್ಟಿಸಿದನು.
33:6b.2CH.033.006 ಬೆನ್ ಹಿನ್ನೋಮ್ ಮಗನ ತಗ್ಗಿನಲ್ಲಿ ತನ್ನ ಮಕ್ಕಳನ್ನು ಬೆಂಕಿ ದಾಟುವಂತೆ ಮಾಡಿದನು; ಮೇಘಮಂತ್ರ ಸರ್ಪ ಮಂತ್ರಗಳನ್ನೂ ಮಾಟವನ್ನು ಮಾಡಿದನು; ಯಕ್ಷಿಣಿ ಗಾರರ ಮಂತ್ರಗಾರರ ಬಳಿಯಲ್ಲೂ ವಿಚಾರಿಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸುವಂತೆ ಆತನ ಸಮ್ಮುಖ ದಲ್ಲಿ ಬಹಳವಾಗಿ ಕೆಟ್ಟತನವನ್ನು ಮಾಡಿದನು.
33:7b.2CH.033.007 ದೇವರು--ಈ ಆಲಯದಲ್ಲಿಯೂ ಇಸ್ರಾಯೇಲಿನ ಸಮಸ್ತ ಗೋತ್ರಗಳಿಂದ ನಾನು ಆದುಕೊಂಡ ಯೆರೂ ಸಲೇಮಿನಲ್ಲಿಯೂ ನಾನು ನನ್ನ ಹೆಸರನ್ನು ಯುಗ ಯುಗಕ್ಕೂ ಇರಿಸುವೆನೆಂದೂ ಮೋಶೆಯಿಂದ
33:8b.2CH.033.008 ಬರೆ ಯಿಸಿದ ಸಮಸ್ತ ನ್ಯಾಯಪ್ರಮಾಣವೂ ಆಜ್ಞೆಗಳೂ ಕಟ್ಟಳೆಗಳೂ ಇವುಗಳ ಪ್ರಕಾರ ನಾನು ಅವರಿಗೆ ಆಜ್ಞಾಪಿಸಿದ್ದೆನ್ನೆಲ್ಲವನ್ನು ಅವರು ಮಾಡಲು ಜಾಗ್ರತೆ ಯಾಗಿದ್ದರೆ ನಾನು ನಿಮ್ಮ ಪಿತೃಗಳಿಗೋಸ್ಕರ ನೇಮಿಸಿದ ದೇಶದೊಳಗಿಂದ ಇಸ್ರಾಯೇಲಿನ ಪಾದವನ್ನು ನಾನು ಇನ್ನು ಮೇಲೆ ಚಲಿಸ ಮಾಡುವದಿಲ್ಲವೆಂದೂ ಆತನು ದಾವೀದನಿಗೂ ಅವನ ಮಗನಾದ ಸೊಲೊಮೋನ ನಿಗೂ ಹೇಳಿದ ದೇವರ ಆಲಯದಲ್ಲಿ ಅವನು ಕೆತ್ತಿದ ವಿಗ್ರಹವನ್ನು ಮಾಡಿಸಿ ಇರಿಸಿದನು.
33:9b.2CH.033.009 ಹೀಗೆಯೇ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ನಾಶ ಮಾಡಿದ ಜನಾಂಗಗಳಿಗಿಂತ ಯೆಹೂದದವರೂ ಯೆರೂಸಲೇಮಿನ ನಿವಾಸಿಗಳೂ ಕೆಟ್ಟದ್ದನ್ನು ಮಾಡು ವದಕ್ಕೆ ತಪ್ಪಿಹೋಗುವಂತೆ ಮನಸ್ಸೆಯು ಮಾಡಿದನು.
33:10b.2CH.033.010 ಕರ್ತನು ಮನಸ್ಸೆಯೊಂದಿಗೂ ಅವನ ಜನ ರೊಂದಿಗೂ ಮಾತನಾಡಿದನು; ಆದರೆ ಅವರು ಆಲೈ ಸದೆ ಹೋದರು.
33:11b.2CH.033.011 ಆದಕಾರಣ ಕರ್ತನು ಅಶ್ಶೂರದ ಅರಸನ ಸೈನ್ಯದ ಅಧಿಪತಿಗಳನ್ನು ಬರಮಾಡಿದನು. ಅವರು ಮನಸ್ಸೆಯನ್ನು ಮುಳ್ಳುಗಿಡಗಳಲ್ಲಿ ಹಿಡಿದು ಅವನಿಗೆ ಸಂಕೋಲೆಗಳನ್ನು ಹಾಕಿ ಅವನನ್ನು ಬಾಬೆಲಿಗೆ ಒಯ್ದರು.
33:12b.2CH.033.012 ಅವನು ಬಾಧೆಯಲ್ಲಿರುವಾಗ ತನ್ನ ದೇವ ರಾದ ಕರ್ತನನ್ನು ಬೇಡಿಕೊಂಡದ್ದಲ್ಲದೆ ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನಿಗೆ ಪ್ರಾರ್ಥನೆ ಮಾಡಿದನು.
33:13b.2CH.033.013 ಆಗ ಆತನು ಕನಿಕರಪಟ್ಟು ಅವನ ಬಿನ್ನಹವನ್ನು ಕೇಳಿ ಯೆರೂಸ ಲೇಮಿಗೆ ತನ್ನ ರಾಜ್ಯಕ್ಕೆ ಅವನನ್ನು ತಿರಿಗಿ ಬರಮಾಡಿ ದನು. ಆಗ ಕರ್ತನೇ ದೇವರೆಂದು ಮನಸ್ಸೆಯು ತಿಳಿದುಕೊಂಡನು.
33:14b.2CH.033.014 ಇದಾದ ತರುವಾಯ ಮನಸ್ಸೆಯು ದಾವೀದನ ಪಟ್ಟಣದ ಹೊರಭಾಗದಲ್ಲಿ ಗೀಹೋನಿನ ಪಶ್ಚಿಮ ಕಡೆಯ ತಗ್ಗಿನಲ್ಲಿ ವಿಾನುಬಾಗಲ ದ್ವಾರದ ವರೆಗೆ ಓಫೆಲ್ ಸುತ್ತಲೂ ಗೋಡೆಯನ್ನು ಕಟ್ಟಿಸಿ ಅದನ್ನು ಬಹಳ ಎತ್ತರ ಮಾಡಿ ಯೆಹೂದದ ಸಮಸ್ತ ಕೋಟೆ ಯುಳ್ಳ ಪಟ್ಟಣಗಳಲ್ಲಿ ಸೈನ್ಯದ ಅಧಿಪತಿಗಳನ್ನು ಇಟ್ಟನು.
33:15b.2CH.033.015 ಇದಲ್ಲದೆ ಅವನು ಅನ್ಯ ದೇವರುಗಳನ್ನೂ ಕರ್ತನ ಆಲಯದಲ್ಲಿರುವ ವಿಗ್ರಹವನ್ನೂ ಕರ್ತನ ಆಲಯದ ಪರ್ವತದಲ್ಲಿಯೂ ಯೆರೂಸಲೇಮಿನ ಲ್ಲಿಯೂ ತಾನು ಕಟ್ಟಿಸಿದ ಸಮಸ್ತ ಬಲಿಪೀಠಗಳನ್ನೂ ತೆಗೆದುಹಾಕಿ ಅವುಗಳನ್ನು ಪಟ್ಟಣದ ಹೊರಗೆ ಬಿಸಾಡಿ ಬಿಟ್ಟನು.
33:16b.2CH.033.016 ಅವನು ಕರ್ತನ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ಸಮಾಧಾನದ ಬಲಿಗಳನ್ನೂ ಸ್ತೋತ್ರದ ಬಲಿಗಳನ್ನೂ ಅರ್ಪಿಸಿ ಇಸ್ರಾಯೇಲಿನ ದೇವರಾದ ಕರ್ತನನ್ನು ಸೇವಿಸಲು ಯೆಹೂದದವರಿಗೆ ಆಜ್ಞಾಪಿಸಿ ದನು.
33:17b.2CH.033.017 ಆದಾಗ್ಯೂ ಜನರು ಇನ್ನೂ ಉನ್ನತ ಸ್ಥಳ ಗಳಲ್ಲಿಯೇ ತಮ್ಮ ದೇವರಾದ ಕರ್ತನಿಗೆ ಮಾತ್ರ ಬಲಿಯನ್ನರ್ಪಿಸುತ್ತಾ ಇದ್ದರು.
33:18b.2CH.033.018 ಮನಸ್ಸೆಯ ಇತರ ಕ್ರಿಯೆಗಳೂ ಅವನು ತನ್ನ ದೇವರಿಗೆ ಮಾಡಿದ ಪ್ರಾರ್ಥನೆಯೂ ಇಸ್ರಾಯೇಲಿನ ದೇವರಾದ ಕರ್ತನ ನಾಮದಲ್ಲಿ ಅವನ ಸಂಗಡ ಮಾತನಾಡಿದ ಪ್ರವಾದಿಗಳ ಮಾತುಗಳೂ ಇಗೋ, ಇಸ್ರಾಯೇಲಿನ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
33:19b.2CH.033.019 ಇದಲ್ಲದೆ ಅವನ ಪ್ರಾರ್ಥನೆಯೂ ಅವನು ದೇವ ರಿಗೆ ಭಿನ್ನವಿಸಿದ್ದೂ ಅವನ ಸಮಸ್ತ ಪಾಪವೂ ಅವನ ಅಪರಾಧವೂ ಅವನು ತಗ್ಗಿಸಿಕೊಳ್ಳುವದಕ್ಕಿಂತ ಮುಂಚೆ ಉನ್ನತ ಸ್ಥಳಗಳಲ್ಲಿ ಕಟ್ಟಿಸಿದ ತೋಪುಗಳೂ ಕೆತ್ತಿಸಿದ ವಿಗ್ರಹಗಳೂ ಸ್ಥಾಪಿಸಿದ ಸ್ಥಳಗಳೂ ಇಗೋ, ಪ್ರವಾದಿ ಗಳ ಚರಿತ್ರೆಯಲ್ಲಿ ಬರೆಯಲ್ಪಟ್ಟಿವೆ.
33:20b.2CH.033.020 ಮನಸ್ಸೆಯು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನನ್ನು ಅವನ ಸ್ವಂತ ಮನೆಯಲ್ಲಿ ಹೂಣಿಟ್ಟರು; ಅವನ ಮಗನಾದ ಆಮೋನನು ಅವನಿಗೆ ಬದಲಾಗಿ ಆಳಿದನು.
33:21b.2CH.033.021 ಆಮೋನನು ಆಳಲು ಆರಂಭಿಸಿದಾಗ ಇಪ್ಪತ್ತೆ ರಡು ವರುಷದವನಾಗಿದ್ದು, ಯೆರೂಸಲೇಮಿನಲ್ಲಿ ಎರಡು ವರುಷ ಆಳಿದನು.
33:22b.2CH.033.022 ಆದರೆ ಅವನು ತನ್ನ ತಂದೆಯಾದ ಮನಸ್ಸೆಯು ಮಾಡಿದ ಹಾಗೆ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆಮೋನನು ತನ್ನ ತಂದೆಯಾದ ಮನಸ್ಸೆಯು ಮಾಡಿದ ಕೆತ್ತಿದ ವಿಗ್ರಹಗಳಿಗೆ ಬಲಿಗಳನ್ನರ್ಪಿಸಿ ಅವುಗಳನ್ನು ಸೇವಿಸಿ ದನು.
33:23b.2CH.033.023 ತನ್ನ ತಂದೆಯಾದ ಮನಸ್ಸೆಯು ತನ್ನನ್ನು ತಗ್ಗಿಸಿಕೊಂಡ ಹಾಗೆ ಆಮೋನನು ಕರ್ತನ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ; ಆದರೆ ಆಮೋನನು ಅಧಿಕ ವಾಗಿ ಅಪರಾಧ ಮಾಡಿದನು.
33:24b.2CH.033.024 ಆದದರಿಂದ ಅವನ ಸೇವಕರು ಅವನ ಮೇಲೆ ಒಳಸಂಚು ಮಾಡಿ ಅವನ ಸ್ವಂತ ಮನೆಯಲ್ಲಿ ಅವನನ್ನು ಕೊಂದುಹಾಕಿದರು.ಆದರೆ ದೇಶದ ಜನರು ಅರಸನಾದ ಆಮೋನನ ಮೇಲೆ ಒಳಸಂಚು ಮಾಡಿದವರನ್ನೆಲ್ಲಾ ಕೊಂದುಹಾಕಿ ಅವನ ಮಗನಾದ ಯೋಷೀಯನನ್ನು ಅವನಿಗೆ ಬದ ಲಾಗಿ ಅರಸನನ್ನಾಗಿ ಮಾಡಿದರು.
33:25b.2CH.033.025 ಆದರೆ ದೇಶದ ಜನರು ಅರಸನಾದ ಆಮೋನನ ಮೇಲೆ ಒಳಸಂಚು ಮಾಡಿದವರನ್ನೆಲ್ಲಾ ಕೊಂದುಹಾಕಿ ಅವನ ಮಗನಾದ ಯೋಷೀಯನನ್ನು ಅವನಿಗೆ ಬದ ಲಾಗಿ ಅರಸನನ್ನಾಗಿ ಮಾಡಿದರು.
34
34:1b.2CH.034.001 ಯೋಷೀಯನು ಆಳಲು ಆರಂಭಿಸಿದಾಗ ಎಂಟು ವರುಷದವನಾಗಿದ್ದು ಯೆರೂಸ ಲೇಮಿನಲ್ಲಿ ಮೂವತ್ತೊಂದು ವರುಷ ಆಳಿದನು.
34:2b.2CH.034.002 ಅವನು ಕರ್ತನ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು; ಎಡಗಡೆಗಾದರೂ ಬಲಗಡೆಗಾದರೂ ತೊಲಗದೆ ತನ್ನ ಪಿತೃವಾದ ದಾವೀದನ ಮಾರ್ಗ ಗಳಲ್ಲಿ ನಡೆದನು.
34:3b.2CH.034.003 ಅವನು ಇನ್ನೂ ಹುಡುಗನಾಗಿರುವಾಗ ತನ್ನ ಆಳ್ವಿಕೆಯ ಎಂಟನೇ ವರುಷದಲ್ಲಿ ತನ್ನ ಪಿತೃವಾದ ದಾವೀದನ ದೇವರನ್ನು ಹುಡುಕಲು ಆರಂಭಿಸಿದನು. ಅವನ ಆಳ್ವಿಕೆಯ ಹನ್ನೆರಡನೇ ವರುಷದಲ್ಲಿ ಉನ್ನತ ಸ್ಥಳಗಳನ್ನೂ ತೋಪುಗಳನ್ನೂ ಕೆತ್ತಿದ ವಿಗ್ರಹಗಳನ್ನೂ ಎರಕಹೊಯಿದ ವಿಗ್ರಹಗಳನ್ನೂ ತೆಗೆದುಹಾಕಿ ಯೆಹೂದ ಯೆರೂಸಲೇಮನ್ನು ಶುಚಿಮಾಡಲು ಆರಂಭಿಸಿದನು.
34:4b.2CH.034.004 ಅವರು ಬಾಳನ ಬಲಿಪೀಠಗಳನ್ನು ಅವನ ಸಮ್ಮುಖದಿಂದ ಕೆಡವಿಹಾಕಿದರು. ಅವುಗಳ ಮೇಲಿರುವ ಸೂರ್ಯಸ್ತಂಭಗಳನ್ನು ಕಡಿದುಹಾಕಿ ತೋಪುಗಳನ್ನೂ ಕೆತ್ತಿದ ವಿಗ್ರಹಗಳನ್ನೂ ಎರಕ ಹೊಯ್ದ ವಿಗ್ರಹಗಳನ್ನೂ ಒಡೆದುಬಿಟ್ಟು ಪುಡಿಪುಡಿ ಮಾಡಿ, ಅವುಗಳಿಗೆ ಬಲಿ ಅರ್ಪಿಸಿದವರ ಸಮಾಧಿ ಗಳ ಮೇಲೆ ಚೆಲ್ಲಿಸಿ
34:5b.2CH.034.005 ಪೂಜಾರಿಗಳ ಎಲುಬುಗಳನ್ನು ಅವರ ಬಲಿಪೀಠಗಳ ಮೇಲೆ ಸುಟ್ಟುಬಿಟ್ಟು, ಯೆಹೂ ದವನ್ನೂ ಯೆರೂಸಲೇಮನ್ನೂ ಶುಚಿಮಾಡಿದರು.
34:6b.2CH.034.006 ಹೀಗೆಯೇ ಅವರು ತಮ್ಮ ಗುದ್ದಲಿಗಳಿಂದ ಮನಸ್ಸೆ ಎಫ್ರಾಯಾಮ್ ಸಿಮೆಯೋನ್ ಪಟ್ಟಣಗಳು ಮೊದಲು ಗೊಂಡು ನಫ್ತ್ತಾಲಿಯ ವರೆಗೂ ಸುತ್ತಲೂ ಮಾಡಿದರು.
34:7b.2CH.034.007 ಅವನು ಬಲಿಪೀಠಗಳನ್ನೂ ತೋಪುಗಳನ್ನೂ ಕೆಡವಿ ಹಾಕಿ ಕೆತ್ತಿದ ವಿಗ್ರಹಗಳನ್ನು ಕುಟ್ಟಿ ಪುಡಿಪುಡಿ ಮಾಡಿ ಇಸ್ರಾಯೇಲ್ ದೇಶದಲ್ಲೆಲ್ಲಿಯೂ ಇರುವ ಸಮಸ್ತ ವಿಗ್ರಹಗಳನ್ನು ಕೆಡಿಸಿದ ತರುವಾಯ ಯೆರೂಸಲೇಮಿಗೆ ಹಿಂತಿರುಗಿದನು.
34:8b.2CH.034.008 ಆದರೆ ಯೋಷೀಯನ ಆಳ್ವಿಕೆಯ ಹದಿನೆಂಟನೇ ವರುಷದಲ್ಲಿ ಅವನು ದೇಶವನ್ನೂ ಆಲಯವನ್ನೂ ಶುಚಿಮಾಡಿದ ತರುವಾಯ ತನ್ನ ದೇವರಾದ ಕರ್ತನ ಆಲಯವನ್ನು ದುರಸ್ತುಮಾಡುವದಕ್ಕೆ ಅಚಲ್ಯನ ಮಗ ನಾದ ಶಾಫಾನನನ್ನೂ ಪಟ್ಟಣದ ಅಧಿಪತಿಯಾದ ಮಾಸೇಯನನ್ನೂ ರಾಯಸದವನಾದ ಯೋವಾಹಾ ಜನ ಮಗನಾದ ಯೋವಾಹನನ್ನೂ ಕಳುಹಿಸಿದನು.
34:9b.2CH.034.009 ಅವರು ಪ್ರಧಾನ ಯಾಜಕನಾದ ಹಿಲ್ಕೀಯನ ಬಳಿಗೆ ಬಂದು ದ್ವಾರಪಾಲಕರಾದ ಲೇವಿಯರು ಮನಸ್ಸೆ ಎಫ್ರಾ ಯಾಮಿನವರ ಕೈಯಿಂದಲೂ ಇಸ್ರಾಯೇಲಿನ ಉಳಿದ ವರ ಕೈಯಿಂದಲೂ ಯೆಹೂದ ಬೆನ್ಯಾವಿಾನಿನವರೆ ಲ್ಲರ ಕೈಯಿಂದಲೂ ಕೂಡಿಸಿ ಅದನ್ನು ಯೆರೂಸಲೇ ಮಿಗೆ ತಿರಿಗಿ ಬಂದು ದೇವರ ಆಲಯಕ್ಕೆ ಹಣವನ್ನು ಕೊಟ್ಟರು.
34:10b.2CH.034.010 ಕರ್ತನ ಆಲಯದ ಕೆಲಸದವರ ವಿಚಾರ ಕರ ಕೈಯಲ್ಲಿ ಅದನ್ನು ಒಪ್ಪಿಸಿದರು. ಇವರು ಆಲಯ ವನ್ನು ಭದ್ರಪಡಿಸಿ ದುರಸ್ತುಮಾಡಲು ಕರ್ತನ ಆಲ ಯದಲ್ಲಿ ಕೆಲಸ ಮಾಡುವವರಿಗೆ ಅದನ್ನು ಕೊಟ್ಟರು.
34:11b.2CH.034.011 ಕೆತ್ತಿದ ಕಲ್ಲುಗಳನ್ನೂ ಜಂತೆಗಳಿಗೋಸ್ಕರ ಮರಗ ಳನ್ನೂ ಕೊಂಡುಕೊಂಡವರಾಗಿ ಯೆಹೂದದ ಅರಸು ಗಳು ಕೆಡವಿಹಾಕಿದ ಮನೆಗಳಲ್ಲಿ ನೆಲಕ್ಕೆ ಹಾಸುವದ ಕ್ಕೋಸ್ಕರ ಶಿಲ್ಪಿಯವರಿಗೂ ಕಟ್ಟುವವರಿಗೂ ಕೊಟ್ಟರು.
34:12b.2CH.034.012 ಈ ಮನುಷ್ಯರು ಕೆಲಸವನ್ನು ನಂಬಿಕೆಯಿಂದ ಮಾಡಿ ದರು. ಅವರ ವಿಚಾರಣೆಯ ಕರ್ತರು ಯಾರಂದರೆ: ಮೆರಾರಿಯ ಕುಮಾರರಲ್ಲಿ ಲೇವಿಯರಾದ ಯಹತನೂ ಒಬದ್ಯನೂ; ಕೆಹಾತ್ಯರ ಮಕ್ಕಳಲ್ಲಿ ಜೆಕರೀಯನೂ ಮೆಷುಲ್ಲಾಮನೂ; ಗೀತವಾದ್ಯಗಳಲ್ಲಿ ಬುದ್ಧಿಯುಳ್ಳವ ರಾದ ಲೇವಿಯರೆಲ್ಲರೂ ಅದನ್ನು ನಡಿಸುತ್ತಾ ಇದ್ದರು.
34:13b.2CH.034.013 ಇದಲ್ಲದೆ ಹೊರೆಗಾರರ ಮೇಲೆಯೂ ಬೇರೆ ಬೇರೆ ಸೇವೆಯ ಕೆಲಸವನ್ನು ಮಾಡುವವರ ಮೇಲೆಯೂ ಅವರು ವಿಚಾರಕರಾಗಿದ್ದರು. ಲೇವಿಯವರಲ್ಲಿ ಕೆಲವರು ರಾಯಸದವರೂ ಯಜಮಾನರೂ ದ್ವಾರಪಾಲಕರೂ ಆಗಿದ್ದರು.
34:14b.2CH.034.014 ಆದರೆ ಕರ್ತನ ಆಲಯಕ್ಕೆ ತಂದ ಹಣವನ್ನು ಅವರು ಹೊರಗೆ ತಕ್ಕೊಂಡು ಬರುವಾಗ ಯಾಜಕ ನಾದ ಹಿಲ್ಕೀಯನು ಮೋಶೆಯ ಕೈಯಿಂದಾದ ಕರ್ತನ ನ್ಯಾಯಪ್ರಮಾಣದ ಪುಸ್ತಕವನ್ನು ಕಂಡುಕೊಂಡನು.
34:15b.2CH.034.015 ಆಗ ಹಿಲ್ಕೀಯನು ಪ್ರತ್ಯುತ್ತರ ಕೊಟ್ಟು ರಾಯಸದ ವನಾದ ಶಾಫಾನನಿಗೆ--ಕರ್ತನ ಆಲಯದಲ್ಲಿ ನ್ಯಾಯ ಪ್ರಮಾಣದ ಪುಸ್ತಕವು ನನಗೆ ಸಿಕ್ಕಿತು ಎಂದು ಹೇಳಿ ದನು. ಮತ್ತು ಹಿಲ್ಕೀಯನು ಆ ಪುಸ್ತಕವನ್ನು ಶಾಫಾನ ನಿಗೆ ಒಪ್ಪಿಸಿದನು.
34:16b.2CH.034.016 ಶಾಫಾನನು ಆ ಪುಸ್ತಕವನ್ನು ಅರಸನ ಬಳಿಗೆ ತಕ್ಕೊಂಡು ಹೋಗಿ ಅರಸನಿಗೆ ಈ ಮಾತನ್ನು ತಿರಿಗಿ ಹೇಳಿದನು. ಏನಂದರೆ, ನಿನ್ನ ಸೇವಕರ ಕೈಗೆ ಒಪ್ಪಿಸಿದ್ದನ್ನೆಲ್ಲಾ ಅವರು ಮಾಡುತ್ತಾರೆ.
34:17b.2CH.034.017 ಇದಲ್ಲದೆ ಅವರು ಕರ್ತನ ಆಲಯದಲ್ಲಿ ಸಿಕ್ಕಿದ ಹಣವನ್ನು ಸುರಿದು ವಿಚಾರಕರ ಕೈಯಲ್ಲಿಯೂ ಕೆಲಸದವರ ಕೈಯ ಲ್ಲಿಯೂ ಒಪ್ಪಿಸಿದ್ದಾರೆ.
34:18b.2CH.034.018 ರಾಯಸದವನಾದ ಶಾಫಾ ನನು ಅರಸನಿಗೆ--ಯಾಜಕನಾದ ಹಿಲ್ಕೀಯನು ನನಗೆ ಪುಸ್ತಕವನ್ನು ಕೊಟ್ಟಿದ್ದಾನೆ ಎಂದು ತಿಳಿಸಿದನು; ಆಗ ಶಾಫಾನನು ಅದನ್ನು ಅರಸನ ಮುಂದೆ ಓದಿದನು.
34:19b.2CH.034.019 ಅರಸನು ನ್ಯಾಯಪ್ರಮಾಣದ ವಾಕ್ಯಗಳನ್ನು ಕೇಳಿ ದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡನು.
34:20b.2CH.034.020 ಅರಸನು ಹಿಲ್ಕೀಯನಿಗೂ ಶಾಫಾನನ ಮಗನಾದ ಅಹೀಕಾಮ ನಿಗೂ ವಿಾಕನ ಮಗನಾದ ಅಬ್ದೋನನಿಗೂ ರಾಯಸದ ವನಾದ ಶಾಫಾನನಿಗೂ ಅರಸನ ಸೇವಕನಾದ ಅಸಾಯ ನಿಗೂ ಆಜ್ಞಾಪಿಸಿ--
34:21b.2CH.034.021 ನೀವು ಹೋಗಿ ನನಗೋಸ್ಕ ರವೂ ಇಸ್ರಾಯೇಲಿನಲ್ಲಿಯೂ ಯೆಹೂದದಲ್ಲಿಯೂ ಉಳಿದವರಿಗೋಸ್ಕರವೂ ಸಿಕ್ಕಿದ ಪುಸ್ತಕದ ಮಾತು ಗಳನ್ನು ಕುರಿತು ಕರ್ತನನ್ನು ವಿಚಾರಿಸಿರಿ. ಯಾಕಂದರೆ ನಮ್ಮ ಪಿತೃಗಳು ಈ ಪುಸ್ತಕದಲ್ಲಿ ಬರೆದ ಎಲ್ಲಾದರ ಪ್ರಕಾರ ಮಾಡಲು ಕರ್ತನ ವಾಕ್ಯವನ್ನು ಕೈಕೊಳ್ಳದೆ ಇದ್ದದರಿಂದ ನಮ್ಮ ಮೇಲೆ ಸುರಿದ ಕರ್ತನ ಕೋಪವು ದೊಡ್ಡದಾಗಿದೆ ಎಂದು ಹೇಳಿದನು.
34:22b.2CH.034.022 ಆಗ ಹಿಲ್ಕೀ ಯನೂ ಅರಸನಿಂದ ನೇಮಿಸಲ್ಪಟ್ಟವರೂ ಹಸ್ರನ ಮಗನೂ ತೊಕ್ಹತನ ಮಗನೂ ವಸ್ತ್ರಗಳ ಕಾವಲುಗಾ ರನೂ ಆದ ಶಲ್ಲೂಮನ ಹೆಂಡತಿಯಾಗಿರುವ ಪ್ರವಾದಿ ನಿಯಾದ ಹುಲ್ದಳ ಬಳಿಗೆ ಹೋಗಿ ಅವಳ ಸಂಗಡ ಅದನ್ನು ಕುರಿತು ಮಾತನಾಡಿದರು. (ಅವಳು ಯೆರೂ ಸಲೇಮಿನೊಳಗೆ ಮಹಾವಿದ್ಯಾಲಯದಲ್ಲಿ ವಾಸವಾಗಿ ದ್ದಳು.)
34:23b.2CH.034.023 ಆಗ ಅವಳು--ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದವನಿಗೆ ನೀವು ಹೇಳಬೇಕಾದದ್ದೇನಂದರೆ
34:24b.2CH.034.024 ಇಗೋ, ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಕೇಡನ್ನೂ ಯೆಹೂದದ ಅರಸನ ಮುಂದೆ ಅವರು ಓದಿದ ಪುಸ್ತಕದಲ್ಲಿ ಬರೆ ಯಲ್ಪಟ್ಟ ಎಲ್ಲಾ ಶಾಪಗಳನ್ನೂ ಬರಮಾಡುವೆನು.
34:25b.2CH.034.025 ಯಾಕಂದರೆ ತಮ್ಮ ಸಮಸ್ತ ಕೈ ಕ್ರಿಯೆಗಳಿಂದ ನನಗೆ ಕೋಪವನ್ನೆಬ್ಬಿಸುವ ಹಾಗೆ ಅವರು ನನ್ನನ್ನು ಬಿಟ್ಟು ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ಆದದರಿಂದ ನನ್ನ ಕೋಪವು ಈ ಸ್ಥಳದ ಮೇಲೆ ಸುರಿಸಲ್ಪಡುವದು; ಅದು ಆರಿಹೋಗುವದಿಲ್ಲ.
34:26b.2CH.034.026 ಆದರೆ ಕರ್ತನಿಂದ ವಿಚಾರಿಸಲು ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ--ನೀನು ಕೇಳಿದ ಮಾತುಗ ಳನ್ನು ಕುರಿತು ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--
34:27b.2CH.034.027 ನೀನು ಈ ಸ್ಥಳಕ್ಕೆ ವಿರೋಧ ವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ದೇವರು ಹೇಳಿದ ಮಾತುಗಳನ್ನು ನೀನು ಕೇಳಿದಾಗ ನಿನ್ನ ಹೃದಯವು ಮೆತ್ತಗಾಗಿ ನೀನು ಆತನ ಮುಂದೆ ನಿನ್ನನ್ನು ತಗ್ಗಿಸಿಕೊಂಡಿ. ನಿನ್ನನ್ನು ನನ್ನ ಮುಂದೆ ತಗ್ಗಿಸಿ ಕೊಂಡು ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಮುಂದೆ ಅತ್ತದ್ದರಿಂದ ನಾನು ಅವನ ಮೊರೆಯನ್ನು ಕೇಳಿದೆನೆಂದು ಕರ್ತನು ಹೇಳುತ್ತಾನೆ.
34:28b.2CH.034.028 ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ಸಮಾಧಾನದಿಂದ ನಿನ್ನ ಸಮಾ ಧಿಗೆ ಸೇರಿಸಲ್ಪಡುವಿ. ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ನೋಡುವದಿಲ್ಲ ಎಂದು ಕರ್ತನು ಹೇಳುತ್ತಾನೆ ಎಂದು ಹೇಳಿದಳು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ಹೇಳಿದರು.
34:29b.2CH.034.029 ಆಗ ಅರಸನು ಕರೇ ಕಳುಹಿಸಿ ಯೆಹೂದದ ಯೆರೂಸಲೇಮಿನ ಹಿರಿಯರೆಲ್ಲರನ್ನು ತನ್ನ ಬಳಿಯಲ್ಲಿ ಕೂಡಿಸಿದನು.
34:30b.2CH.034.030 ಆಗ ಅರಸನೂ ಯೆಹೂದದ ಸಮಸ್ತ ಮನುಷ್ಯರೂ ಯೆರೂಸಲೇಮಿನ ನಿವಾಸಿಗಳೂ ಯಾಜ ಕರೂ ಲೇವಿಯರೂ ಹಿರಿಕಿರಿಯರಾದ ಸಮಸ್ತ ಜನರೂ ಕರ್ತನ ಆಲಯಕ್ಕೆ ಹೋದರು. ಅವನು ಕರ್ತನ ಆಲಯದಲ್ಲಿ ಕಂಡುಕೊಂಡ ಒಡಂಬಡಿಕೆಯ ಪುಸ್ತಕದ ಮಾತುಗಳನ್ನೆಲ್ಲಾ ಅವರು ಕೇಳುವ ಹಾಗೆ ಓದಿದನು.
34:31b.2CH.034.031 ಅರಸನು ತನ್ನ ಸ್ಥಳದಲ್ಲಿ ನಿಂತುಕೊಂಡು ಕರ್ತನನ್ನು ಹಿಂಬಾಲಿಸುವದಕ್ಕೂ ಆತನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆಗಳನ್ನೂ ತನ್ನ ಪೂರ್ಣಹೃದಯದಿಂದಲೂ ತನ್ನ ಪೂರ್ಣಪ್ರಾಣದಿಂದಲೂ ಕೈಕೊಳ್ಳುವದಕ್ಕೂ ಈ ಪುಸ್ತಕದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳ ಹಾಗೆ ಮಾಡುವದಕ್ಕೂ ಕರ್ತನ ಮುಂದೆ ಒಡಂಬಡಿಕೆ ಮಾಡಿದನು.
34:32b.2CH.034.032 ಇದಲ್ಲದೆ ಅವನು ಯೆರೂಸಲೇಮಿ ನಲ್ಲಿಯೂ ಬೆನ್ಯಾವಿಾನಿನಲ್ಲಿಯೂ ಸಿಕ್ಕಿದವರೆಲ್ಲರನ್ನು ಅದಕ್ಕೆ ಒಪ್ಪುವಂತೆ ಮಾಡಿದನು. ಹಾಗೆಯೇ ಯೆರೂ ಸಲೇಮಿನ ನಿವಾಸಿಗಳು ತಮ್ಮ ಪಿತೃಗಳ ದೇವರ ಒಡಂಬಡಿಕೆಯ ಪ್ರಕಾರ ಮಾಡಿದರು.ಹೀಗೆಯೇ ಯೋಷೀಯನು ಇಸ್ರಾಯೇಲ್ ಮಕ್ಕಳಿಗೆ ಇದ್ದ ಎಲ್ಲಾ ದೇಶಗಳೊಳಗಿಂದ ಸಮಸ್ತ ಅಸಹ್ಯಗಳನ್ನು ತೆಗೆದು ಹಾಕಿ ಇಸ್ರಾಯೇಲಿನಲ್ಲಿ ಉಳಿದಿರುವರೆಲ್ಲರೂ ತಮ್ಮ ದೇವರಾದ ಕರ್ತನನ್ನು ಸೇವಿಸುವ ಹಾಗೆ ಮಾಡಿದನು. ಅವನ ದಿವಸಗಳೆಲ್ಲಾ ಅವರು ತಮ್ಮ ಪಿತೃಗಳ ದೇವ ರಾದ ಕರ್ತನನ್ನು ಹಿಂಬಾಲಿಸುವದನ್ನು ಬಿಡದೆ ಇದ್ದರು.
34:33b.2CH.034.033 ಹೀಗೆಯೇ ಯೋಷೀಯನು ಇಸ್ರಾಯೇಲ್ ಮಕ್ಕಳಿಗೆ ಇದ್ದ ಎಲ್ಲಾ ದೇಶಗಳೊಳಗಿಂದ ಸಮಸ್ತ ಅಸಹ್ಯಗಳನ್ನು ತೆಗೆದು ಹಾಕಿ ಇಸ್ರಾಯೇಲಿನಲ್ಲಿ ಉಳಿದಿರುವರೆಲ್ಲರೂ ತಮ್ಮ ದೇವರಾದ ಕರ್ತನನ್ನು ಸೇವಿಸುವ ಹಾಗೆ ಮಾಡಿದನು. ಅವನ ದಿವಸಗಳೆಲ್ಲಾ ಅವರು ತಮ್ಮ ಪಿತೃಗಳ ದೇವ ರಾದ ಕರ್ತನನ್ನು ಹಿಂಬಾಲಿಸುವದನ್ನು ಬಿಡದೆ ಇದ್ದರು.
35
35:1b.2CH.035.001 ಇದಲ್ಲದೆ ಯೋಷೀಯನು ಯೆರೂಸ ಲೇಮಿನಲ್ಲಿ ಕರ್ತನಿಗೆ ಪಸ್ಕವನ್ನು ಆಚರಿ ಸಿದನು. ಮೊದಲನೇ ತಿಂಗಳ ಹದಿನಾಲ್ಕನೇ ದಿವಸ ದಲ್ಲಿ ಪಸ್ಕದ ಕುರಿಯನ್ನು ವಧಿಸಿದರು.
35:2b.2CH.035.002 ಆಗ ಅವನು ಯಾಜಕರನ್ನು ಅವರವರ ಕೆಲಸಗಳಲ್ಲಿ ನಿಲ್ಲಿಸಿ ಕರ್ತನ ಆಲಯದ ಸೇವೆ ಮಾಡುವದಕ್ಕೆ ಅವರನ್ನು ದೃಢ ಪಡಿಸಿ,
35:3b.2CH.035.003 ಸಮಸ್ತ ಇಸ್ರಾಯೇಲ್ಯರಿಗೆ ಬೋಧಿಸತಕ್ಕ ವರೂ ಕರ್ತನಿಗೆ ಪ್ರತಿಷ್ಠಿತರೂ ಆದ ಲೇವಿಯರಿಗೆಪರಿಶುದ್ಧವಾದ ಮಂಜೂಷವು ನಿಮ್ಮ ಭುಜಗಳ ಮೇಲೆ ಭಾರವಿಲ್ಲದ ಹಾಗೆ ನೀವು ಅದನ್ನು ಇಸ್ರಾ ಯೇಲಿನ ಅರಸನಾಗಿರುವ ದಾವೀದನ ಮಗನಾದ ಸೊಲೊಮೋನನು ಕಟ್ಟಿಸಿದ ಮನೆಯಲ್ಲಿ ಇರಿಸಿ ನಿಮ್ಮ ದೇವರಾದ ಕರ್ತನನ್ನೂ ಆತನ ಜನವಾದ ಇಸ್ರಾಯೇಲ್ಯರನ್ನೂ ಸೇವಿಸಿರಿ.
35:4b.2CH.035.004 ಇದಲ್ಲದೆ ಇಸ್ರಾ ಯೇಲಿನ ಅರಸನಾದ ದಾವೀದನ ಬರಹದ ಪ್ರಕಾರ ವಾಗಿಯೂ ಅವನ ಮಗನಾದ ಸೊಲೊಮೋನನ ಬರಹದ ಪ್ರಕಾರವಾಗಿಯೂ ನಿಮ್ಮ ಸರತಿಗಳಲ್ಲಿ ನಿಮ್ಮ ಪಿತೃಗಳ ಮನೆಗಳ ಪ್ರಕಾರ ಸಿದ್ಧಮಾಡಿಕೊಂಡು
35:5b.2CH.035.005 ಜನರಾದ ನಿಮ್ಮ ಸಹೋದರರ ಪಿತೃಗಳ ಕುಟುಂಬ ಗಳ ವಿಭಾಗದ ಪ್ರಕಾರವಾಗಿ ಪರಿಶುದ್ಧ ಸ್ಥಾನದಲ್ಲಿ ನಿಲ್ಲಿರಿ.
35:6b.2CH.035.006 ಪಸ್ಕವನ್ನು ವಧಿಸಿ ನಿಮ್ಮನ್ನು ಪರಿಶುದ್ಧ ಮಾಡಿ ಕೊಂಡು ಕರ್ತನು ಮೋಶೆಯ ಮುಖಾಂತರವಾಗಿ ಹೇಳಿದ ವಾಕ್ಯದ ಪ್ರಕಾರ ನಿಮ್ಮ ಸಹೋದರರು ಮಾಡುವ ಹಾಗೆ ಅವರನ್ನು ಸಿದ್ಧಮಾಡಿರಿ ಅಂದನು.
35:7b.2CH.035.007 ಆಗ ಯೋಷೀಯನು ಸಿದ್ಧವಾಗಿದ್ದ ಸಮಸ್ತ ಜನ ರಿಗೆ ಪಸ್ಕದ ಬಲಿಗೋಸ್ಕರ ಮಂದೆಯಿಂದ ಮೂವತ್ತು ಸಾವಿರ ಕುರಿಮರಿಗಳನ್ನೂ ಮೇಕೆಯ ಮರಿಗಳನ್ನೂ ಕೊಟ್ಟನು. ಇದಲ್ಲದೆ ಮೂರು ಸಾವಿರ ಎತ್ತುಗಳನ್ನು ಕೊಟ್ಟನು; ಇವೆಲ್ಲಾ ಅರಸನ ಸೊತ್ತಿನಿಂದಲೇ
35:8b.2CH.035.008 ಹಾಗೆಯೇ ಅವನ ಪ್ರಧಾನರು ಜನರಿಗೂ ಯಾಜಕ ರಿಗೂ ಲೇವಿಯರಿಗೂ ಮನಃಪೂರ್ವಕವಾಗಿ ಕೊಟ್ಟರು. ದೇವರ ಆಲಯದ ನಾಯಕರಾದ ಹಿಲ್ಕೀಯನೂ ಜೆಕರೀಯನೂ ಯೆಹೀಯೇಲನೂ ಪಸ್ಕದ ಬಲಿ ಗೋಸ್ಕರ ಎರಡು ಸಾವಿರದ ಆರು ನೂರು ಮರಿ ಗಳನ್ನೂ ಮುನ್ನೂರು ಎತ್ತುಗಳನ್ನೂ ಯಾಜಕರಿಗೆ ಕೊಟ್ಟರು.
35:9b.2CH.035.009 ಇದಲ್ಲದೆ ಲೇವಿಯರಲ್ಲಿ ಪ್ರಧಾನರಾದ ಕೋನನ್ಯನೂ ಅವನ ಸಹೋದರರಾದ ಶೆಮಾಯನೂ ನೆತನೇಲನೂ ಹಷಲ್ಯನೂ ಯೆಗೀಯೇಲನೂ ಯೋಜಾಬಾದನೂ ಪಸ್ಕದ ಬಲಿಗಳ ನಿಮಿತ್ತವಾಗಿ ಐದು ಸಾವಿರ ಮರಿಗಳನ್ನೂ ಐನೂರು ಎತ್ತುಗಳನ್ನೂ ಲೇವಿಯರಿಗೆ ಕೊಟ್ಟರು.
35:10b.2CH.035.010 ಹೀಗೆಯೇ ಅರಸನ ಆಜ್ಞೆಯ ಪ್ರಕಾರ ಸೇವೆಯು ಸಿದ್ಧಮಾಡಲ್ಪಟ್ಟಿತು. ಯಾಜಕರು ತಮ್ಮ ತಮ್ಮ ಸ್ಥಳಗಳಲ್ಲಿಯೂ ಲೇವಿಯರು ತಮ್ಮ ತಮ್ಮ ಸರತಿಗಳಲ್ಲಿಯೂ ನಿಂತಿದ್ದರು.
35:11b.2CH.035.011 ಲೇವಿಯರು ಪಸ್ಕದ ಕುರಿಯನ್ನು ವಧಿಸಿದ ತರು ವಾಯ ಯಾಜಕರು ಅವರ ಕೈಯಿಂದ ರಕ್ತವನ್ನು ತಕ್ಕೊಂಡು ಚಿಮುಕಿಸಿದರು; ಆದರೆ ಲೇವಿಯರು ಚರ್ಮ ವನ್ನು ಸುಲಿದರು;
35:12b.2CH.035.012 ಮೋಶೆಯ ಪುಸ್ತಕದಲ್ಲಿ ಬರೆಯ ಲ್ಪಟ್ಟ ಹಾಗೆ ಕರ್ತನಿಗೆ ಅರ್ಪಿಸುವದಕ್ಕೋಸ್ಕರ ಜನರಿಗೆ ಆಯಾ ಕುಟುಂಬಗಳ ಶಾಖೆಗಳ ಪ್ರಕಾರ ಕೊಡಲು ಅವರು ದಹನಬಲಿಗಳನ್ನು ಹಾಗೆ ಎತ್ತುಗಳನ್ನು ತೆಗೆದಿಟ್ಟರು.
35:13b.2CH.035.013 ಹೀಗೆ ಕಟ್ಟಳೆಯ ಪ್ರಕಾರ ಪಸ್ಕವನ್ನು ಬೆಂಕಿಯಿಂದ ಬೇಯಿಸಿದರು. ಆದರೆ ಪರಿಶುದ್ಧವಾದ ವುಗಳನ್ನು ಗಡಿಗೆಗಳಲ್ಲಿಯೂ ತಪ್ಪಲೆಗಳಲ್ಲಿಯೂ ಕೊಪ್ಪರಿಗೆಗಳಲ್ಲಿಯೂ ಬೇಯಿಸಿ ಶೀಘ್ರವಾಗಿ ಜನರೆ ಲ್ಲರಿಗೆ ಕಳುಹಿಸಿದರು.
35:14b.2CH.035.014 ತರುವಾಯ ತಮಗೋಸ್ಕ ರವೂ ಯಾಜಕರಿಗೋಸ್ಕರವೂ ಸಿದ್ಧಮಾಡಿದರು. ಯಾಕಂದರೆ ಆರೋನನ ಮಕ್ಕಳಾದ ಯಾಜಕರು ರಾತ್ರಿಯ ಪರ್ಯಂತರ ದಹನ ಬಲಿಗಳನ್ನೂ ಕೊಬ್ಬನ್ನೂ ಅರ್ಪಿಸುವದರಲ್ಲಿದ್ದರು. ಆದದರಿಂದ ಲೇವಿಯರು ತಮಗೋಸ್ಕರವೂ ಆರೋನನ ಮಕ್ಕಳಾದ ಯಾಜಕರಿ ಗೋಸ್ಕರವೂ ಸಿದ್ಧಮಾಡಿದರು.
35:15b.2CH.035.015 ದಾವೀದನೂ ಆಸಾ ಫನೂ ಹೇಮಾನನೂ ಅರಸನ ಪ್ರವಾದಿಯಾದ ಯೆದುತೂನನೂ ಇವರ ಆಜ್ಞೆಯ ಪ್ರಕಾರ ಆಸಾಫನ ಮಕ್ಕಳಾದ ಹಾಡುಗಾರರು ತಮ್ಮ ಸ್ಥಳದಲ್ಲಿದ್ದರು; ಹಾಗೆಯೇ ದ್ವಾರಪಾಲಕರು ಪ್ರತಿಯೊಂದು ಬಾಗಲಲ್ಲಿ ಇದ್ದರು; ಅವರು ತಮ್ಮ ಸೇವೆಯನ್ನು ಬಿಡಲು ಆಗದೆ ಇತ್ತು; ಯಾಕಂದರೆ ಅವರ ಸಹೋದರರಾದ ಲೇವಿಯರು ಅವರ ನಿಮಿತ್ತ ಸಿದ್ಧಮಾಡಿದರು.
35:16b.2CH.035.016 ಹೀಗೆಯೇ ಅರಸನಾದ ಯೋಷೀಯನ ಆಜ್ಞೆಯ ಪ್ರಕಾರ ಪಸ್ಕ ವನ್ನು ಆಚರಿಸುವದಕ್ಕೂ ಕರ್ತನ ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸುವದಕ್ಕೂ ಅದೇ ದಿವಸ ದಲ್ಲಿ ಕರ್ತನ ಸೇವೆಯು ಸಿದ್ಧವಾಯಿತು.
35:17b.2CH.035.017 ಸಿದ್ಧವಾಗಿದ್ದ ಇಸ್ರಾಯೇಲಿನ ಮಕ್ಕಳು ಆ ಕಾಲದಲ್ಲಿ ಪಸ್ಕವನ್ನೂ ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನೂ ಏಳು ದಿವಸ ಆಚರಿಸಿದರು.
35:18b.2CH.035.018 ಪ್ರವಾದಿಯಾದ ಸಮುವೇಲನ ದಿವಸಗಳು ಮೊದಲುಗೊಂಡು ಇಸ್ರಾಯೇಲಿನಲ್ಲಿ ಇಂಥಾ ಪಸ್ಕವನ್ನು ಆಚರಿಸಿದ್ದಿಲ್ಲ. ಇಸ್ರಾಯೇಲಿನ ಸಮಸ್ತ ಅರಸುಗಳಲ್ಲಿ ಯೋಷೀಯನೂ ಯಾಜಕರೂ ಲೇವಿಯರೂ ಸಿದ್ಧವಾಗಿದ್ದ ಯೆಹೂದ ಇಸ್ರಾಯೇಲ್ಯ ರೆಲ್ಲರೂ ಯೆರೂಸಲೇಮಿನ ನಿವಾಸಿಗಳೂ ಆಚರಿಸಿದ ಪಸ್ಕದ ಹಾಗೆ ಯಾರೂ ಆಚರಿಸಲಿಲ್ಲ.
35:19b.2CH.035.019 ಯೋಷೀ ಯನ ಆಳಿಕೆಯ ಹದಿನೆಂಟನೇ ವರುಷದಲ್ಲಿ ಈ ಪಸ್ಕವು ಆಚರಿಸಲ್ಪಟ್ಟಿತು.
35:20b.2CH.035.020 ಇದೆಲ್ಲಾ ಆದ ತರುವಾಯ ಯೋಷೀಯನು ಮಂದಿರವನ್ನು ಸಿದ್ಧಮಾಡಿದ ಮೇಲೆ ಐಗುಪ್ತದ ಅರಸ ನಾದ ನೆಕೋ ಯೂಫ್ರೇಟೀಸ್ ಬಳಿಯಲ್ಲಿ ಕರ್ಕೆವಿಾ ಷಿಗೆ ಯುದ್ಧ ಮಾಡಲು ಬಂದನು;
35:21b.2CH.035.021 ಯೋಷೀಯನು ಅವನ ಮೇಲೆ ಯುದ್ಧಕ್ಕೆ ಹೋದನು. ಆದರೆ ಇವನು ಯೋಷೀಯನ ಬಳಿಗೆ ಸೇವಕರನ್ನು ಕಳುಹಿಸಿ--ಯೆಹೂದದ ಅರಸನೇ, ನನಗೆ ನಿನಗೆ ಏನು? ಈ ಹೊತ್ತು ನಿನ್ನ ಮೇಲೆ ಅಲ್ಲ, ನಾನು ಯುದ್ಧಮಾಡುವ ಮನೆಯ ಮೇಲೆ ಬರುತ್ತೇನೆ; ತ್ವರೆಮಾಡು ಎಂದು ದೇವರು ನನಗೆ ಹೇಳಿದ್ದಾನೆ. ನನ್ನ ಸಂಗಡ ಇರುವ ದೇವರು ನಿನ್ನನ್ನು ನಾಶ ಮಾಡದ ಹಾಗೆ ನೀನು ಆತನ ಮುಂದೆ ಸುಮ್ಮನಿರು.
35:22b.2CH.035.022 ಆದಾಗ್ಯೂ ಯೋಷೀ ಯನು ತನ್ನ ಮುಖವನ್ನು ಅವನ ಕಡೆಯಿಂದ ತಿರುಗಿಸದೆ ಅವನ ಸಂಗಡ ಯುದ್ಧಮಾಡಲು ತನ್ನನ್ನು ಮರೆ ಮಾಜಿದನು. ಅವನು ದೇವರ ಬಾಯಿಂದ ಬಂದ ನೆಕೋನನ ಮಾತುಗಳನ್ನು ಕೇಳದೆ ಮೆಗಿದ್ದೋನು ತಗ್ಗಿನಲ್ಲಿ ಯುದ್ಧಮಾಡ ಬಂದನು.
35:23b.2CH.035.023 ಆಗ ಬಿಲ್ಲುಗಾ ರರು ಅರಸನಾದ ಯೋಷೀಯನ ಮೇಲೆ ಎಸೆದರು; ಅರಸನು ತನ್ನ ಸೇವಕರಿಗೆ--ನನ್ನನ್ನು ಆಚೆಗೆ ಒಯ್ಯಿರಿ; ಯಾಕಂದರೆ ಬಹು ಗಾಯಪಟ್ಟಿದ್ದೇನೆ ಅಂದನು.
35:24b.2CH.035.024 ಆದದರಿಂದ ಅವನ ಸೇವಕರು ಆ ರಥದೊಳಗಿಂದ ಅವನನ್ನು ತೆಗೆದುಕೊಂಡು ಅವನಿಗಿದ್ದ ಎರಡನೇ ರಥ ದಲ್ಲಿ ಅವನನ್ನು ಇರಿಸಿ ಯೆರೂಸಲೇಮಿಗೆ ತಂದರು. ಅವನು ಅಲ್ಲಿ ಸತ್ತು ತನ್ನ ಪಿತೃಗಳ ಸಮಾಧಿಗಳಲ್ಲಿ ಹೂಣಲ್ಪಟ್ಟನು. ಸಮಸ್ತ ಯೆಹೂದ ಯೆರೂಸಲೇಮಿ ನವರು ಯೋಷೀಯನಿಗೋಸ್ಕರ ದುಃಖಪಟ್ಟರು.
35:25b.2CH.035.025 ಇದಲ್ಲದೆ ಯೆರೆವಿಾಯನು ಯೋಷೀಯನಿಗೋಸ್ಕರ ಗೋಳಾಡಿದನು. ಹಾಡುಗಾರರೂ ಹಾಡುಗಾರ್ತಿ ಯರೂ ಯೋಷೀಯನಿಗೋಸ್ಕರ ಇದುವರೆಗೂ ತಮ್ಮ ಗೋಳಾಟಗಳಲ್ಲಿ ಹೇಳುತ್ತಾರೆ. ಇದು ಇಸ್ರಾಯೇಲಿ ನಲ್ಲಿ ನೇಮಕವಾಯಿತು. ಇಗೋ, ಅವು ಪ್ರಲಾಪ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
35:26b.2CH.035.026 ಆದರೆ ಯೋಷೀಯನ ಮಿಕ್ಕಾದ ಕ್ರಿಯೆಗಳು, ಕರ್ತನ ನ್ಯಾಯಪ್ರಮಾಣದಲ್ಲಿ ಬರೆಯಲ್ಪಟ್ಟ ಹಾಗೆ ಅವನು ಮಾಡಿದ ಉಪಕಾರಗಳೂಅವನ ಕ್ರಿಯೆಗಳೂ ಮೊದಲನೆಯವುಗಳೂ ಕಡೆ ಯವುಗಳೂ ಇಸ್ರಾಯೇಲ್ ಯೆಹೂದದ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
35:27b.2CH.035.027 ಅವನ ಕ್ರಿಯೆಗಳೂ ಮೊದಲನೆಯವುಗಳೂ ಕಡೆ ಯವುಗಳೂ ಇಸ್ರಾಯೇಲ್ ಯೆಹೂದದ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
36
36:1b.2CH.036.001 ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು, ತಕ್ಕೊಂಡು ಯೆರೂಸಲೇಮಿನಲ್ಲಿ ಅವನ ತಂದೆಗೆ ಬದ ಲಾಗಿ ಅವನನ್ನು ಅರಸನಾಗಿ ಮಾಡಿದರು.
36:2b.2CH.036.002 ಯೆಹೋ ವಾಹಾಜನು ಆಳಲು ಆರಂಭಿಸಿದಾಗ ಇಪ್ಪತ್ತಮೂರು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು.
36:3b.2CH.036.003 ಐಗುಪ್ತದ ಅರಸನು ಯೆರೂಸಲೇ ಮಿನಲ್ಲಿ ಅವನನ್ನು ತೆಗೆದುಹಾಕಿ ದೇಶದಿಂದ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರ ವನ್ನೂ ದಂಡ ತಕ್ಕೊಂಡನು.
36:4b.2CH.036.004 ಇದಲ್ಲದೆ ಐಗುಪ್ತದ ಅರಸನು ಅವನ ಸಹೋದರನಾದ ಎಲ್ಯಾಕೀಮ ನನ್ನು ಯೆಹೂದದ ಯೆರೂಸಲೇಮಿನ ಮೇಲೆ ಅರಸ ನಾಗಿ ಮಾಡಿ ಯೆಹೋಯಾಕೀಮನೆಂಬ ಬದಲು ಹೆಸರನ್ನು ಅವನಿಗೆ ಇಟ್ಟನು. ನೆಕೋ ಅವನ ಸಹೋ ದರನಾದ ಯೆಹೋವಾಹಾಜನನ್ನು ತಕ್ಕೊಂಡು ಐಗುಪ್ತಕ್ಕೆ ಒಯ್ದನು.
36:5b.2CH.036.005 ಯೆಹೋಯಾಕೀಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಆದರೆ ತನ್ನ ದೇವ ರಾದ ಕರ್ತನ ಸಮ್ಮುಖದಲ್ಲಿ ಅವನು ಕೆಟ್ಟದ್ದನ್ನು ಮಾಡಿ ದನು.
36:6b.2CH.036.006 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಬಂದು ಬಾಬೆಲಿಗೆ ಒಯ್ಯುವ ಹಾಗೆ ಅವನಿಗೆ ಸಂಕೋಲೆಗಳನ್ನು ಹಾಕಿಸಿದನು.
36:7b.2CH.036.007 ಇದಲ್ಲದೆ ನೆಬೂಕದ್ನೆಚ್ಚರನು ಕರ್ತನ ಮನೆಯ ಪಾತ್ರೆಗಳಲ್ಲಿ ಕೆಲವನ್ನು ಬಾಬೆಲಿಗೆ ತಕ್ಕೊಂಡು ಹೋಗಿ ಬಾಬೆಲಿ ನಲ್ಲಿರುವ ತನ್ನ ಮಂದಿರದಲ್ಲಿ ಇರಿಸಿದನು.
36:8b.2CH.036.008 ಆದರೆ ಯೆಹೋಯಾಕೀಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಅಸಹ್ಯಗಳೂ ಅವನಲ್ಲಿ ಕಂಡು ಕೊಂಡದ್ದೂ ಇಗೋ, ಅವು ಇಸ್ರಾಯೇಲ್ ಯೆಹೂದದ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಕೀನನು ಆಳಿದನು.
36:9b.2CH.036.009 ಯೆಹೋಯಾಕೀನನು ಆಳಲು ಆರಂಭಿಸಿದಾಗ ಹದಿನೆಂಟು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿವಸ ಆಳಿದನು.
36:10b.2CH.036.010 ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆದರೆ ಒಂದು ವರುಷವು ತೀರಿದ ಮೇಲೆ ಅರಸನಾದ ನೆಬೂಕದ್ನೆಚ್ಚರನು ಜನರನ್ನು ಕಳುಹಿಸಿ ಅವನನ್ನೂ ಕರ್ತನ ಆಲಯದ ಬೆಲೆಯುಳ್ಳ ಪಾತ್ರೆಗಳನ್ನೂ ಬಾಬೆ ಲಿಗೆ ತಕ್ಕೊಂಡು ತರಿಸಿಕೊಂಡು ಅವನ ಸಹೋದರ ನಾದ ಚಿದ್ಕೀಯನನ್ನು ಯೆಹೂದ ಯೆರೂಸಲೇಮಿನ ಮೇಲೆ ಅರಸನಾಗಿ ಮಾಡಿದನು.
36:11b.2CH.036.011 ಚಿದ್ಕೀಯನು ಆಳಲು ಆರಂಭಿಸಿದಾಗ ಅವನು ಇಪ್ಪತ್ತೊಂದು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಹನ್ನೊಂದು ವರುಷ ಆಳಿದನು.
36:12b.2CH.036.012 ಅವನು ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಕರ್ತನ ಬಾಯಿ ಮಾತು ಹೇಳಿದ ಪ್ರವಾದಿ ಯಾದ ಯೆರೆವಿಾಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳದೆ ಇದ್ದನು.
36:13b.2CH.036.013 ಇದಲ್ಲದೆ ಅವನು ದೇವರ ಮೇಲೆ ಆಣೆ ಇಡುವಂತೆ ಮಾಡಿದ ಅರಸನಾದ ನೆಬೂಕದ್ನೆಚ್ಚರನಿಗೆ ತಿರುಗಿ ಬಿದ್ದನು. ಹೇಗಂದರೆ ಅವನು ಇಸ್ರಾಯೇಲಿನ ದೇವರಾದ ಕರ್ತನ ಕಡೆಗೆ ತಿರುಗದೆಯೂ ತನ್ನ ಕುತ್ತಿಗೆ ಯನ್ನು ಬೊಗ್ಗಿಸದೆಯೂ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.
36:14b.2CH.036.014 ಇದಲ್ಲದೆ ಯಾಜಕರಲ್ಲಿರುವ ಎಲ್ಲಾ ಪ್ರಧಾನರೂ ಜನರೂ ಜನಾಂಗಗಳ ಅಸಹ್ಯ ಗಳನ್ನು ಹಿಂಬಾಲಿಸಿ ಬಹಳವಾಗಿ ಅಪರಾಧ ಮಾಡಿ ಕರ್ತನು ಯೆರೂಸಲೇಮಿನಲ್ಲಿ ಪರಿಶುದ್ಧ ಮಾಡಿದ ಆತನ ಆಲಯವನ್ನು ಹೊಲೆ ಮಾಡಿದರು.
36:15b.2CH.036.015 ಅವರ ಪಿತೃಗಳ ಕರ್ತನಾದ ದೇವರು ತನ್ನ ಸೇವಕರನ್ನು ಅವನ ಬಳಿಗೆ ಕಳುಹಿಸಿದನು, ಹೊತ್ತಾರೆಯಿಂದ ಕಳುಹಿಸುತ್ತಾ ಬಂದನು, ಯಾಕಂದರೆ ಆತನು ತನ್ನ ಜನರ ಮೇಲೆಯೂ ತನ್ನ ನಿವಾಸಸ್ಥಾನದ ಮೇಲೆಯೂ ಕನಿಕರಪಟ್ಟನು.
36:16b.2CH.036.016 ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.
36:17b.2CH.036.017 ಆದದರಿಂದ ಆತನು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದನು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಕತ್ತಿಯಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ ಕನ್ಯಾ ಸ್ತ್ರೀಯ ಮೇಲಾ ದರೂ ವೃದ್ಧನ ಮೇಲಾದರೂ ಅತೀ ವೃದ್ಧನ ಮೇಲಾ ದರೂ ಕನಿಕರಪಡಲಿಲ್ಲ. ಆತನು ಸಮಸ್ತವನ್ನು ಅವನ ಕೈಯಲ್ಲಿ ಒಪ್ಪಿಸಿದನು.
36:18b.2CH.036.018 ಇದಲ್ಲದೆ ದೊಡ್ಡವೂ ಸಣ್ಣವೂ ಆದ ಕರ್ತನ ಮನೆಯ ಎಲ್ಲಾ ಸಾಮಾನುಗಳು ಕರ್ತನ ಆಲಯದ ಬೊಕ್ಕಸಗಳು ಅರಸನ ಬೊಕ್ಕಸಗಳು ಅವನ ಪ್ರಧಾನರ ಬೊಕ್ಕಸಗಳು ಇವುಗಳನ್ನೆಲ್ಲಾ ಬಾಬೆಲಿಗೆ ತರಿಸಿದನು.
36:19b.2CH.036.019 ಅವರು ದೇವರ ಆಲಯವನ್ನು ಸುಟ್ಟು ಬಿಟ್ಟು ಯೆರೂಸಲೇಮಿನ ಗೋಡೆಯನ್ನು ಕೆಡವಿ ಹಾಕಿ ಅದರ ಅರಮನೆಗಳನ್ನು ಸುಟ್ಟು ಬಿಟ್ಟು ಅದರ ಬೆಲೆಯುಳ್ಳ ಸಾಮಾನುಗಳನ್ನೆಲ್ಲಾ ಕೆಡಿಸಿದರು.
36:20b.2CH.036.020 ಇದ ಲ್ಲದೆ ಕತ್ತಿಗೆ ತಪ್ಪಿದವರನ್ನು ಅವನು ಬಾಬೆಲಿಗೆ ಒಯ್ದನು. ಅವರು ಅಲ್ಲಿ ಪಾರಸಿಯ ರಾಜ್ಯದ ಆಳ್ವಿಕೆಯ ಪರ್ಯಂತರ, ದೇಶವು ಅದರ ಸಬ್ಬತ್ತುಗಳನ್ನು ಅನುಭವಿ ಸುವ ಪರ್ಯಂತರ, ಯೆರೆವಿಾಯನ ಮುಖಾಂತರವಾಗಿ ಹೇಳಿದ ಕರ್ತನ ವಾಕ್ಯವು ಈಡೇರುವದಕ್ಕೆ ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.
36:21b.2CH.036.021 ದೇಶವು ಎಪ್ಪತ್ತು ವರುಷ ತೀರುವ ಪರ್ಯಂತರ ಹಾಳಾಗಿದ್ದು ಸಬ್ಬತ್ತನ್ನು ಅನುಭವಿಸುತ್ತಾ ಇತ್ತು.
36:22b.2CH.036.022 ಆದರೆ ಪಾರಸಿಯ ಅರಸನಾದ ಕೊರೇಷನ ಮೊದಲನೇ ವರುಷದಲ್ಲಿ ಕರ್ತನು ಯೆರೆವಿಾಯನ ಮೂಲಕವಾಗಿ ಹೇಳಿದ ವಾಕ್ಯವು ಈಡೇರುವ ಹಾಗೆ ಕರ್ತನು ಪಾರಸಿಯ ಅರಸನಾದ ಕೊರೇಷನ ಆತ್ಮ ವನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಸಾರೋಣದಿಂದಲೂ ಬರಹದಿಂದಲೂ ಹೇಳಿದ್ದೇ ನಂದರೆ --ಪಾರಸಿಯ ಅರಸನಾದ ಕೊರೇಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾದ ಕರ್ತನು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದೇಶದೊಳಗೆ ಯೆರೂಸಲೇಮಿನಲ್ಲಿ ತನಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ. ಆತನ ಸಮಸ್ತ ಜನರಾದ ನಿಮ್ಮಲ್ಲಿ ಹೋಗುವವರು ಯಾರು? ಅವನು ಹೋಗಲಿ, ಅವನ ದೇವರಾದ ಕರ್ತನು ಅವನ ಸಂಗಡ ಇರಲಿ ಅಂದನು.
36:23b.2CH.036.023 ಪಾರಸಿಯ ಅರಸನಾದ ಕೊರೇಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾದ ಕರ್ತನು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದೇಶದೊಳಗೆ ಯೆರೂಸಲೇಮಿನಲ್ಲಿ ತನಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ. ಆತನ ಸಮಸ್ತ ಜನರಾದ ನಿಮ್ಮಲ್ಲಿ ಹೋಗುವವರು ಯಾರು? ಅವನು ಹೋಗಲಿ, ಅವನ ದೇವರಾದ ಕರ್ತನು ಅವನ ಸಂಗಡ ಇರಲಿ ಅಂದನು.
- Holder of rights
- Multilingual Bible Corpus
- Citation Suggestion for this Object
- TextGrid Repository (2025). Kannada Collection. 2 Chronicles (Kannada). 2 Chronicles (Kannada). Multilingual Parallel Bible Corpus. Multilingual Bible Corpus. https://hdl.handle.net/21.11113/0000-0016-A198-6