Psalms (Kannada)
1
1:1b.PSA.001.001 ಭಕ್ತಿಹೀನರ ಆಲೋಚನೆಯಂತೆ ನಡೆಯದೆ ಪಾಪಿಗಳ ಮಾರ್ಗದಲ್ಲಿ ನಿಲ್ಲದೆ ಕುಚೋದ್ಯಗಾರರು ಕೂತುಕೊಳ್ಳುವಲ್ಲಿ ಕೂತುಕೊಳ್ಳದೆ
1:2b.PSA.001.002 ಕರ್ತನ ನ್ಯಾಯ ಪ್ರಮಾಣದಲ್ಲಿ ಸಂತೋಷಿಸಿ ಅದನ್ನ್ನು ರಾತ್ರಿ ಹಗಲು ಧ್ಯಾನಿಸುವ ಮನುಷ್ಯನೇ ಧನ್ಯನು.
1:3b.PSA.001.003 ಅವನು ತನ್ನ ಕಾಲದಲ್ಲಿ ತನ್ನ ಫಲಕೊಡುವಂಥ, ಎಲೆ ಬಾಡದಂಥ, ನೀರಿನ ಹೊಳೆಗಳ ಬಳಿಯಲ್ಲಿ ನೆಡಲ್ಪಟ್ಟಂಥ ಮರದ ಹಾಗಿರುವನು; ಅವನು ಮಾಡು ವದೆಲ್ಲಾ ಸಫಲವಾಗುವದು.
1:4b.PSA.001.004 ಭಕ್ತಿಹೀನರು ಹಾಗಲ್ಲ, ಅವರು ಗಾಳಿ ಬಡು ಕೊಂಡು ಹೋಗುವ ಹೊಟ್ಟಿನ ಹಾಗೆ ಇದ್ದಾರೆ.
1:5b.PSA.001.005 ಆದದರಿಂದ ಭಕ್ತಿಹೀನರು ನ್ಯಾಯತೀರ್ಪಿನಲ್ಲಿಯೂ ಪಾಪಿಗಳು ನೀತಿವಂತರ ಸಭೆಯಲ್ಲಿಯೂ ನಿಲ್ಲರು.ನೀತಿವಂತರ ಮಾರ್ಗವನ್ನು ಕರ್ತನು ಅರಿತಿದ್ದಾನೆ; ಆದರೆ ಭಕ್ತಿಹೀನರ ಮಾರ್ಗವು ನಾಶವಾಗುವದು.
1:6b.PSA.001.006 ನೀತಿವಂತರ ಮಾರ್ಗವನ್ನು ಕರ್ತನು ಅರಿತಿದ್ದಾನೆ; ಆದರೆ ಭಕ್ತಿಹೀನರ ಮಾರ್ಗವು ನಾಶವಾಗುವದು.
2
2:1b.PSA.002.001 ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ?
2:2b.PSA.002.002 ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ.
2:3b.PSA.002.003 ಅವರು--ಅವರ ಬಂಧನಗಳನ್ನು ತುಂಡುತುಂಡಾಗಿ ಮುರಿದು ಅವರ ಕಟ್ಟುಗಳನ್ನು ನಮ್ಮಿಂದ ಬಿಸಾಡೋಣ ಅನ್ನುತ್ತಾರೆ.
2:4b.PSA.002.004 ಪರಲೋಕದಲ್ಲಿ ಕೂತಿರುವಾತನು ಅದಕ್ಕೆ ನಗು ವನು! ಕರ್ತನು ಅವರನ್ನು ಪರಿಹಾಸ್ಯ ಮಾಡುವನು.
2:5b.PSA.002.005 ಆಗ ಆತನು ತನ್ನ ಕೋಪದಿಂದ ಅವರ ಸಂಗಡ ಮಾತನಾಡುವನು; ತನ್ನ ಕೋಪಾವೇಶದಿಂದ ಅವ ರನ್ನು ಕಳವಳಪಡಿಸುವನು.
2:6b.PSA.002.006 ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.
2:7b.PSA.002.007 ಕಟ್ಟಳೆಯನ್ನು ಸಾರುತ್ತೇನೆ; ಕರ್ತನು ನನಗೆ ಹೇಳಿದ್ದು--ನೀನು ನನ್ನ ಮಗನು, ನಾನು ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.
2:8b.PSA.002.008 ನನ್ನನ್ನು ಕೇಳು; ಆಗ ಅನ್ಯಜನರನ್ನು ನಿನ್ನ ಬಾಧ್ಯತೆಯಾಗಿಯೂ ಭೂಮಿಯ ಕಟ್ಟಕಡೆಯ ವರೆಗೆ ನಿನ್ನ ಸ್ವಾಸ್ಥ್ಯವಾಗಿಯೂ ಕೊಡುವೆನು.
2:9b.PSA.002.009 ಕಬ್ಬಿಣದ ಕೋಲಿನಿಂದ ಅವರನ್ನು ಮುರಿದುಬಿಡುವಿ. ಕುಂಬಾರನ ಗಡಿಗೆಯ ಹಾಗೆ ಅವ ರನ್ನು ಒಡೆದು ಚೂರುಚೂರಾಗಿ ಮಾಡಿಬಿಡುವಿ.
2:10b.PSA.002.010 ಆದದರಿಂದ ಓ ಅರಸುಗಳೇ, ಈಗ ಜ್ಞಾನವಂತ ರಾಗಿರಿ; ಭೂ ನ್ಯಾಯಾಧಿಪತಿಗಳೇ, ಶಿಕ್ಷಣ ಪಡೆಯಿರಿ.
2:11b.PSA.002.011 ಭಯದಿಂದ ಕರ್ತನನ್ನು ಸೇವಿಸಿರಿ, ನಡು ಗುತ್ತಾ ಉಲ್ಲಾಸಪಡಿರಿ.ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು.
2:12b.PSA.002.012 ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು.
3
3:1b.PSA.003.001 ಕರ್ತನೇ, ನನ್ನನ್ನು ಕಳವಳಪಡಿಸುವವರು ಹೆಚ್ಚಿದ್ದಾರೆ! ನನಗೆ ವಿರೋಧವಾಗಿ ಏಳುವವರು ಅನೇಕರು.
3:2b.PSA.003.002 ದೇವರಲ್ಲಿ ಇವನಿಗೆ ಯಾವ ಸಹಾಯವೂ ಇಲ್ಲವೆಂದು ನನ್ನ ವಿಷಯದಲ್ಲಿ ಅನೇಕರು ಹೇಳುತ್ತಾರೆ. ಸೆಲಾ.
3:3b.PSA.003.003 ಆದರೆ ಓ ನನ್ನ ಕರ್ತನೇ, ನನಗೆ ಗುರಾಣಿಯೂ ನನ್ನ ಘನವೂ ನನ್ನ ತಲೆ ಎತ್ತುವವನೂ ನೀನೇ.
3:4b.PSA.003.004 ನನ್ನ ಧ್ವನಿಯೆತ್ತಿ ಕರ್ತನಿಗೆ ಮೊರೆಯಿಟ್ಟೆನು; ಆತನು ತನ್ನ ಪರಿಶುದ್ಧ ಪರ್ವತದಿಂದ ನನ್ನ ಮೊರೆಯನ್ನು ಕೇಳಿದನು. ಸೆಲಾ.
3:5b.PSA.003.005 ಕರ್ತನೇ ನನ್ನನ್ನು ಕಾಪಾಡಿದ್ದರಿಂದ ನಾನು ಮಲಗಿ ನಿದ್ದೆಗೈದು ಎಚ್ಚತ್ತೆನು.
3:6b.PSA.003.006 ನನಗೆ ವಿರೋಧವಾಗಿ ಸುತ್ತಲೂ ಮುತ್ತಿದ ಹತ್ತು ಸಾವಿರ ಜನರಿಗೆ ಭಯಪಡೆನು.
3:7b.PSA.003.007 ಓ ಕರ್ತನೇ, ಏಳು; ಓ ನನ್ನ ದೇವರೇ, ನನ್ನನ್ನು ರಕ್ಷಿಸು. ನೀನು ನನ್ನ ಶತ್ರುಗಳೆಲ್ಲರ ದವಡೆಯ ಮೇಲೆ ಹೊಡೆದು ಭಕ್ತಿಹೀನರ ಹಲ್ಲುಗಳನ್ನು ಮುರಿದಿದ್ದೀ.ರಕ್ಷಣೆಯು ಕರ್ತನದೇ; ನಿನ್ನ ಜನರ ಮೇಲೆ ನಿನ್ನ ಆಶೀರ್ವಾದ ಉಂಟು. ಸೆಲಾ.
3:8b.PSA.003.008 ರಕ್ಷಣೆಯು ಕರ್ತನದೇ; ನಿನ್ನ ಜನರ ಮೇಲೆ ನಿನ್ನ ಆಶೀರ್ವಾದ ಉಂಟು. ಸೆಲಾ.
4
4:1b.PSA.004.001 ನನ್ನ ನೀತಿಯಾದ ಓ ದೇವರೇ, ನಾನು ಮೊರೆಯಿಡಲು ನನಗೆ ಕಿವಿಗೊಡು, ಇಕ್ಕಟ್ಟಿನಲ್ಲಿ ನನಗೆ ವಿಶಾಲಮಾಡಿದಿ. ನನ್ನ ಮೇಲೆ ಕರುಣೆಯಿಟ್ಟು ನನ್ನ ಪ್ರಾರ್ಥನೆಯನ್ನು ಕೇಳು.
4:2b.PSA.004.002 ಓ ಮನುಷ್ಯರ ಪುತ್ರರೇ, ನನ್ನ ಘನವನ್ನು ಅವ ಮಾನಕ್ಕೆ ತಿರುಗಿಸುವದು ಎಷ್ಟರ ವರೆಗೆ? ನೀವು ವ್ಯರ್ಥವಾದದ್ದನ್ನು ಪ್ರೀತಿಮಾಡಿ ಸುಳ್ಳನ್ನು ಹುಡುಕು ವದು ಎಷ್ಟರ ವರೆಗೆ? ಸೆಲಾ.
4:3b.PSA.004.003 ಕರ್ತನು ತನ್ನ ಭಕ್ತನನ್ನು ತನಗಾಗಿ ಪ್ರತ್ಯೇಕಿಸಿದ್ದಾನೆಂದು ತಿಳಿದು ಕೊಳ್ಳಿರಿ. ನಾನು ಕರ್ತನನ್ನು ಮೊರೆಯಿಡಲು ಆತನು ಕೇಳುವನು.
4:4b.PSA.004.004 ಭಯಭಕ್ತಿಯಿಂದಿರ್ರಿ; ಪಾಪಮಾಡಬೇಡಿರಿ; ಹಾಸಿಗೆ ಗಳ ಮೇಲೆ ನಿಮ್ಮ ಸ್ವಂತ ಹೃದಯದಲ್ಲಿ ಮಾತನಾಡಿ ಮೌನವಾಗಿರ್ರಿ. ಸೆಲಾ.
4:5b.PSA.004.005 ನೀತಿಯ ಬಲಿಗಳನ್ನು ಅರ್ಪಿ ಸಿರಿ; ಕರ್ತನಲ್ಲಿ ನಿಮ್ಮ ಭರವಸವಿಡಿರಿ.
4:6b.PSA.004.006 ನಮಗೆ ಒಳ್ಳೇದನ್ನು ಮಾಡುವವರು ಯಾರೆಂದು ಹೇಳುವವರು ಅನೇಕರು. ಕರ್ತನೇ, ನಿನ್ನ ಮುಖದ ಬೆಳಕನ್ನು ನಮ್ಮ ಮೇಲೆ ಪ್ರಕಾಶಗೊಳಿಸು.
4:7b.PSA.004.007 ಅವರ ಧಾನ್ಯವೂ ದ್ರಾಕ್ಷಾರಸವೂ ಹೆಚ್ಚಿದ ಕಾಲಕ್ಕಿಂತ ಅಧಿಕ ವಾಗಿ ನನ್ನ ಹೃದಯದಲ್ಲಿ ಸಂತೋಷವನ್ನು ಇಟ್ಟಿದ್ದೀ.ಸಮಾಧಾನವಾಗಿ ಮಲಗಿ ನಿದ್ರೆ ಸಹ ಮಾಡುವೆನು; ಯಾಕಂದರೆ ಕರ್ತನೇ, ನೀನೋಬ್ಬನೇ ನನ್ನನ್ನು ಸುರ ಕ್ಷಿತವಾಗಿ ವಾಸಿಸುವಂತೆ ಮಾಡುತ್ತೀ.
4:8b.PSA.004.008 ಸಮಾಧಾನವಾಗಿ ಮಲಗಿ ನಿದ್ರೆ ಸಹ ಮಾಡುವೆನು; ಯಾಕಂದರೆ ಕರ್ತನೇ, ನೀನೋಬ್ಬನೇ ನನ್ನನ್ನು ಸುರ ಕ್ಷಿತವಾಗಿ ವಾಸಿಸುವಂತೆ ಮಾಡುತ್ತೀ.
5
5:1b.PSA.005.001 ಕರ್ತನೇ, ನನ್ನ ಮಾತುಗಳಿಗೆ ಕಿವಿಗೊಡು, ನನ್ನ ಧ್ಯಾನವನ್ನು ಲಕ್ಷ್ಯಕ್ಕೆ ತಂದುಕೋ.
5:2b.PSA.005.002 ನನ್ನ ಅರಸನೇ, ನನ್ನ ದೇವರೇ, ನನ್ನ ಮೊರೆಯ ಶಬ್ದವನ್ನು ಆಲೈಸು; ನಿನ್ನನ್ನೇ ಪ್ರಾರ್ಥಿಸುತ್ತೇನೆ.
5:3b.PSA.005.003 ಓ ಕರ್ತನೇ, ಬೆಳಿಗ್ಗೆ ನನ್ನ ಸ್ವರವನ್ನು ಕೇಳುವಿ; ಹೊತ್ತಾರೆಯಲ್ಲಿ ನಿನಗೆ ಪ್ರಾರ್ಥಿಸಿ ಮೇಲಕ್ಕೆ ನೋಡುವೆನು.
5:4b.PSA.005.004 ನೀನು ದುಷ್ಟತ್ವದಲ್ಲಿ ಸಂತೋಷಿಸುವ ದೇವರಲ್ಲ; ಇಲ್ಲವೆ ಕೆಟ್ಟತನವು ನಿನ್ನ ಬಳಿಯಲ್ಲಿ ತಂಗಲಾರದು.
5:5b.PSA.005.005 ನಿನ್ನ ದೃಷ್ಟಿಯಲ್ಲಿ ಮೂರ್ಖರು ನಿಂತುಕೊಳ್ಳುವದಿಲ್ಲ. ದುಷ್ಟ ಕೆಲಸ ಮಾಡುವವರೆಲ್ಲರನ್ನು ನೀನು ಹಗೆ ಮಾಡುತ್ತೀ.
5:6b.PSA.005.006 ಸುಳ್ಳಾಡುವವರನ್ನು ನೀನು ನಾಶಮಾಡುತ್ತೀ; ಕೊಲೆಗಾರರನ್ನು ಮತ್ತು ಮೋಸಗಾರರನ್ನು ಕರ್ತನು ಅಸಹ್ಯಿಸುತ್ತಾನೆ.
5:7b.PSA.005.007 ನಾನಾದರೋ, ನಿನ್ನ ಕರುಣಾತಿಶಯದಿಂದ ನಿನ್ನ ಆಲಯಕ್ಕೆ ಬರುವೆನು; ನಿನಗೆ ಭಯಪಟ್ಟು ನಿನ್ನ ಪರಿಶುದ್ಧ ಮಂದಿರದ ಕಡೆಗೆ ಆರಾಧಿಸುವೆನು.
5:8b.PSA.005.008 ಓ ಕರ್ತನೇ, ನನ್ನ ವಿರೋಧಿಗಳ ನಿಮಿತ್ತ ನಿನ್ನ ನೀತಿಯಲ್ಲಿ ನನ್ನನ್ನು ನಡಿಸು; ನಿನ್ನ ಮಾರ್ಗವನ್ನು ನನ್ನ ಮುಂದೆ ಸರಾಗಮಾಡು.
5:9b.PSA.005.009 ಅವರ ಬಾಯಲ್ಲಿ ನಂಬಿಗಸ್ತಿಕೆಯು ಇಲ್ಲವೇ ಇಲ್ಲ. ಅವರ ಒಳಭಾಗವು ಅತಿ ದುಷ್ಟತ್ವವೇ. ಅವರ ಗಂಟಲು ತೆರೆದ ಸಮಾ ಧಿಯೇ; ತಮ್ಮ ನಾಲಿಗೆಯಿಂದ ಹೆಮ್ಮೆ ಕೊಚ್ಚಿ ಕೊಳ್ಳುತ್ತಾರೆ.
5:10b.PSA.005.010 ಓ ದೇವರೇ, ಅವರನ್ನು ನಾಶಮಾಡು; ಅವರು ತಮ್ಮ ಸ್ವಂತ ಆಲೋಚನೆಗಳಿಂದ ಬಿದ್ದು ಹೋಗಲಿ; ಅವರ ಅಪಾರವಾದ ದ್ರೋಹಗಳ ನಿಮಿತ್ತ ಅವರನ್ನು ಹೊರಗೆ ಹಾಕು; ಯಾಕಂದರೆ ಅವರು ನಿನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾರೆ.
5:11b.PSA.005.011 ಆದರೆ ನಿನ್ನಲ್ಲಿ ಭರವಸವಿಟ್ಟವರೆಲ್ಲರು ಸಂತೋಷಿ ಸಲಿ, ನೀನು ಅವರನ್ನು ಕಾಯುವದರಿಂದ ಯುಗ ಯುಗಕ್ಕೂ ಹರ್ಷಿಸಲಿ; ನಿನ್ನ ನಾಮವನ್ನು ಪ್ರೀತಿ ಮಾಡುವವರು ನಿನ್ನಲ್ಲಿ ಉತ್ಸಾಹಪಡಲಿ.ಕರ್ತನೇ, ನೀನು ನೀತಿವಂತನನ್ನು ಆಶೀರ್ವದಿಸುತ್ತೀ. ಖೇಡ್ಯದ ಹಾಗೆ ಅನುಗ್ರಹದಿಂದ ಅವನನ್ನು ಸುತ್ತಿಕೊಳ್ಳುತ್ತೀ.
5:12b.PSA.005.012 ಕರ್ತನೇ, ನೀನು ನೀತಿವಂತನನ್ನು ಆಶೀರ್ವದಿಸುತ್ತೀ. ಖೇಡ್ಯದ ಹಾಗೆ ಅನುಗ್ರಹದಿಂದ ಅವನನ್ನು ಸುತ್ತಿಕೊಳ್ಳುತ್ತೀ.
6
6:1b.PSA.006.001 ಓ ಕರ್ತನೇ, ನಿನ್ನ ಕೋಪದಿಂದ ನನ್ನನ್ನು ಗದರಿಸಬೇಡ; ನಿನ್ನ ಉಗ್ರತೆಯಿಂದ ನನ್ನನ್ನು ದಂಡಿಸಬೇಡ.
6:2b.PSA.006.002 ಓ ಕರ್ತನೇ, ನನ್ನ ಮೇಲೆ ದಯವಿಡು; ಯಾಕಂದರೆ ನಾನು ಬಲಹೀನನಾಗಿದ್ದೇನೆ. ಓ ಕರ್ತನೇ, ನನ್ನನ್ನು ಸ್ವಸ್ಥಮಾಡು, ನನ್ನ ಎಲುಬುಗಳು ತಲ್ಲಣಿಸುತ್ತವೆ.
6:3b.PSA.006.003 ನನ್ನ ಪ್ರಾಣವು ಸಹ ಬಹಳವಾಗಿ ತಲ್ಲಣಿಸುತ್ತದೆ; ಆದರೆ ಓ ಕರ್ತನೇ, ಇದು ಎಲ್ಲಿಯ ವರೆಗೆ?
6:4b.PSA.006.004 ಓ ಕರ್ತನೇ, ಹಿಂತಿರುಗಿ ನನ್ನ ಪ್ರಾಣವನ್ನು ತಪ್ಪಿಸಿಬಿಡು. ಹಾ! ನಿನ್ನ ಕರುಣೆಯ ನಿಮಿತ್ತ ನನ್ನನ್ನು ರಕ್ಷಿಸು.
6:5b.PSA.006.005 ಮರಣದಲ್ಲಿ ನಿನ್ನ ಜ್ಞಾಪಕವಿಲ್ಲ; ಸಮಾಧಿ ಯಲ್ಲಿ ನಿನಗೆ ಉಪಕಾರಸ್ತುತಿ ಮಾಡುವವರು ಯಾರು?
6:6b.PSA.006.006 ನಾನು ನರನರಳಿ ದಣಿದಿದ್ದೇನೆ; ಪ್ರತಿ ರಾತ್ರಿಯೂ ನನ್ನ ಕಣ್ಣೀರಿನಿಂದ ಮಂಚವು ತೇಲಾ ಡುತ್ತದೆ. ಹಾಸಿಗೆಯು ಕಣ್ಣೀರಿನಿಂದ ನೆನೆದು ಹೋಗುತ್ತದೆ.
6:7b.PSA.006.007 ದುಃಖದಿಂದ ನನ್ನ ಕಣ್ಣು ಬತ್ತಿ ಹೋಗಿದೆ. ನನ್ನ ಸಕಲ ವೈರಿಗಳಿಂದ ಅದು ಡೊಗರುಬಿದ್ದಿದೆ.
6:8b.PSA.006.008 ಅಕ್ರಮ ಮಾಡುವವರೇ, ನನ್ನ ಬಳಿಯಿಂದ ತೊಲ ಗಿರಿ; ಅಳುವ ನನ್ನ ಸ್ವರವನ್ನು ಕರ್ತನು ಕೇಳಿದ್ದಾನೆ;
6:9b.PSA.006.009 ಕರ್ತನು ನನ್ನ ವಿಜ್ಞಾಪನೆಯನ್ನು ಕೇಳಿದ್ದಾನೆ; ಕರ್ತನು ನನ್ನ ಪ್ರಾರ್ಥನೆಯನ್ನು ಅಂಗೀಕರಿಸುವನು.ನನ್ನ ಶತ್ರುಗಳೆಲ್ಲರು ನಾಚಿಕೆಪಟ್ಟು ಬಹಳವಾಗಿ ಕಳವಳ ಗೊಳ್ಳಲಿ; ಅವರು ತಿರುಗಿಕೊಂಡು ಕ್ಷಣಮಾತ್ರದಲ್ಲಿ ನಾಚಿಕೆಪಡಲಿ.
6:10b.PSA.006.010 ನನ್ನ ಶತ್ರುಗಳೆಲ್ಲರು ನಾಚಿಕೆಪಟ್ಟು ಬಹಳವಾಗಿ ಕಳವಳ ಗೊಳ್ಳಲಿ; ಅವರು ತಿರುಗಿಕೊಂಡು ಕ್ಷಣಮಾತ್ರದಲ್ಲಿ ನಾಚಿಕೆಪಡಲಿ.
7
7:1b.PSA.007.001 ನನ್ನ ದೇವರಾದ ಓ ಕರ್ತನೇ, ನಿನ್ನಲ್ಲಿ ಭರವಸವಿಟ್ಟಿದ್ದೇನೆ. ನನ್ನನ್ನು ಹಿಂಸಿಸುವ ವರಿಂದ ತಪ್ಪಿಸಿ ಕಾಪಾಡು;
7:2b.PSA.007.002 ಇಲ್ಲವಾದರೆ ಅವನು ನನ್ನ ಪ್ರಾಣವನ್ನು ಸಿಂಹದಂತೆ ಹರಿದು ತುಂಡು ತುಂಡು ಮಾಡುವನು.
7:3b.PSA.007.003 ನನ್ನ ದೇವರಾದ ಓ ಕರ್ತನೇ, ನಾನು ಇದನ್ನು ಮಾಡಿದರೆ, ಅಂದರೆ ನನ್ನ ಕೈಗಳಲ್ಲಿ ಅಪರಾ ಧವಿದ್ದರೆ,
7:4b.PSA.007.004 ಹೌದು, ನನ್ನೊಂದಿಗೆ ಸಮಾಧಾನದಿಂದ ಇದ್ದವನಿಗೆ ನಾನು ಕೇಡು ಮಾಡಿದ್ದರೆ, ಯಾವ ಕಾರಣವಿಲ್ಲದೆ ನನಗೆ ವೈರಿಯಾಗಿರುವವನನ್ನು ನಾನು ಶತ್ರುವಿಗೆ ತಪ್ಪಿಸಿಬಿಟ್ಟೆನಲ್ಲಾ,
7:5b.PSA.007.005 ವೈರಿಯು ನನ್ನ ಪ್ರಾಣ ವನ್ನು ಹಿಡಿದು ಹಿಂಸಿಸಿ ನನ್ನ ಜೀವವನ್ನು ಭೂಮಿಗೆ ತುಳಿದು ನನ್ನ ಗೌರವವನ್ನು ಧೂಳಿನೊಳಗೆ ಹಾಕಿ ಬಿಡಲಿ--ಸೆಲಾ.
7:6b.PSA.007.006 ಓ ಕರ್ತನೇ, ನಿನ್ನ ಕೋಪದಿಂದ ಏಳು; ನನ್ನ ವೈರಿಗಳ ಉಗ್ರತೆಗಾಗಿ ಎದ್ದೇಳು; ನನ್ನ ನಿಮಿತ್ತ ಎಚ್ಚರಗೊಳ್ಳು; ನೀನು ನ್ಯಾಯತೀರ್ವಿಕೆಯನ್ನು ಆಜ್ಞಾ ಪಿಸಿದ್ದೀಯಲ್ಲಾ.
7:7b.PSA.007.007 ಹೀಗೆ ಪ್ರಜೆಗಳ ಸಭೆಯು ನಿನ್ನನ್ನು ಸುತ್ತಿಕೊಳ್ಳುವದು. ಆದದರಿಂದ ಅವರ ನಿಮಿತ್ತ ನೀನು ಉನ್ನತಕ್ಕೆ ತಿರುಗಿಕೋ.
7:8b.PSA.007.008 ಕರ್ತನು ಜನಗಳಿಗೆ ನ್ಯಾಯ ತೀರಿಸುವನು. ಓ ಕರ್ತನೇ, ನನ್ನಲ್ಲಿರುವ ನನ್ನ ನೀತಿಯ ಪ್ರಕಾರವೂ ಯಥಾರ್ಥತೆಯ ಪ್ರಕಾರವೂ ನನಗೆ ನ್ಯಾಯತೀರಿಸು.
7:9b.PSA.007.009 ದುಷ್ಟರ ದುಷ್ಟತನವು ಮುಗಿದು ಹೋಗಲಿ, ಆದರೆ ನೀತಿವಂತನನ್ನು ದೃಢಪಡಿಸು. ನೀತಿಯುಳ್ಳ ದೇವರು ಹೃದಯವನ್ನೂ ಅಂತರಿಂದ್ರಿ ಯಗಳನ್ನೂ ಶೋಧಿಸುತ್ತಾನಲ್ಲಾ.
7:10b.PSA.007.010 ಯಥಾರ್ಥ ಹೃದ ಯವುಳ್ಳವನನ್ನು ರಕ್ಷಿಸುವ ದೇವರಲ್ಲಿ ನನ್ನ ರಕ್ಷಣೆ ಉಂಟು.
7:11b.PSA.007.011 ದೇವರು ನೀತಿವಂತರಿಗೆ ನ್ಯಾಯತೀರಿಸುತ್ತಾನೆ. ದೇವರು ಪ್ರತಿದಿನ ದುಷ್ಟರ ಮೇಲೆ ರೋಷವುಳ್ಳ ವನಾಗಿದ್ದಾನೆ.
7:12b.PSA.007.012 ಅವನು ತಿರಿಗಿಕೊಳ್ಳದಿದ್ದರೆ ಆತನು ತನ್ನ ಕತ್ತಿ ಮಸೆಯುವನು: ತನ್ನ ಬಿಲ್ಲು ಬಗ್ಗಿಸಿ ಅದನ್ನು ಸಿದ್ಧಮಾಡಿದ್ದಾನೆ.
7:13b.PSA.007.013 ಅವನಿಗೆ ಮರಣಾಯುಧಗಳನ್ನು ಸಹ ಸಿದ್ಧಮಾಡಿ, ಹಿಂಸಿಸುವವರಿಗೋಸ್ಕರ ತನ್ನ ಬಾಣಗಳನ್ನು ಸಿದ್ಧಮಾಡುತ್ತಾನೆ.
7:14b.PSA.007.014 ಇಗೋ, ಅವನು ದುಷ್ಟತನದಿಂದ ಪ್ರಸವವೇದನೆ ಪಡುತ್ತಾನೆ. ಕೇಡನ್ನು ಗರ್ಭಧರಿಸಿಕೊಂಡು ಸುಳ್ಳನ್ನು ಹೆರುವನು.
7:15b.PSA.007.015 ಅವನು ಕುಣಿಯನ್ನು ಅಗೆದಿದ್ದಾನೆ. ಆದರೆ ತಾನು ಅಗೆದ ಕುಣಿಯೊಳಗೆ ತಾನೇ ಬಿದ್ದಿದ್ದಾನೆ.
7:16b.PSA.007.016 ಅವನ ಕೇಡು ಅವನ ಸ್ವಂತ ತಲೆಯ ಮೇಲೆ ತಿರುಗುವದು; ಅವನ ನೆತ್ತಿಯ ಮೇಲೆ ಅವನ ಬಲಾತ್ಕಾರವು ಇಳಿಯುವದು;ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.
7:17b.PSA.007.017 ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.
8
8:1b.PSA.008.001 ನಮ್ಮ ದೇವರಾದ ಓ ಕರ್ತನೇ, ನಿನ್ನ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ಶ್ರೇಷ್ಠವಾಗಿದೆ. ನಿನ್ನ ಮಹಿಮೆಯನ್ನು ಆಕಾಶಗಳ ಮೇಲೆ ಇರಿಸಿದ್ದೀ.
8:2b.PSA.008.002 ಶತ್ರುವನ್ನೂ ಮುಯ್ಯಿಗೆ ಮುಯ್ಯಿ ಕೊಡುವವನನ್ನೂ ನಿಲ್ಲಿಸಿಬಿಡುವದಕ್ಕೆ ನಿನ್ನ ವೈರಿಗಳ ನಿಮಿತ್ತ ಶಿಶುಗಳ ಮತ್ತು ಮೊಲೆ ಕೂಸುಗಳ ಬಾಯಿಂದ ನೀನು ನಿನ್ನ ಬಲವನ್ನು ಸ್ಥಾಪಿಸಿದ್ದೀ.
8:3b.PSA.008.003 ನಿನ್ನ ಕೈಕೆಲಸವಾದ ಆಕಾಶಗಳನ್ನೂ ನೀನು ಸಿದ್ಧ ಮಾಡಿದ ಚಂದ್ರ ನಕ್ಷತ್ರಗಳನ್ನೂ ನಾನು ಆಲೋ ಚಿಸುವಾಗ
8:4b.PSA.008.004 ಮನುಷ್ಯನನ್ನು ನೆನಸುವ ಹಾಗೆ ಅವನು ಎಷ್ಟರವನು? ಅವನನ್ನು ದರ್ಶಿಸುವ ಹಾಗೆ ಮನುಷ್ಯನ ಮಗನು ಎಷ್ಟರವನು?
8:5b.PSA.008.005 ಅವನನ್ನು ದೂತರಿಗಿಂತ ಸ್ವಲ್ಪಕಡಿಮೆ ಮಾಡಿ ಪ್ರಭಾವವನ್ನೂ ಘನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದೀ.
8:6b.PSA.008.006 ನಿನ್ನ ಕೈಕೆಲಸಗಳ ಮೇಲೆ ಅವನನ್ನು ಆಳುವಂತೆ ಮಾಡಿದ್ದೀ;
8:7b.PSA.008.007 ಎಲ್ಲಾ ಕುರಿದನಗಳನ್ನೂ ಹೌದು, ಅಡವಿಯ ಮೃಗಗಳನ್ನೂ
8:8b.PSA.008.008 ಆಕಾಶದ ಪಕ್ಷಿ ಗಳನ್ನೂ ಸಮುದ್ರದ ವಿಾನುಗಳನ್ನೂ ಸಮುದ್ರದಲ್ಲಿ ಸಂಚರಿಸುವಂಥದ್ದನ್ನೆಲ್ಲಾ ಅವನ ಪಾದಗಳ ಕೆಳಗೆ ಹಾಕಿದ್ದೀ.ಓ ಕರ್ತನೇ, ನಮ್ಮ ಕರ್ತನೇ, ನಿನ್ನ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ಶ್ರೇಷ್ಠವಾಗಿದೆ.
8:9b.PSA.008.009 ಓ ಕರ್ತನೇ, ನಮ್ಮ ಕರ್ತನೇ, ನಿನ್ನ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ಶ್ರೇಷ್ಠವಾಗಿದೆ.
9
9:1b.PSA.009.001 ಓ ಕರ್ತನೇ, ನಾನು ಪೂರ್ಣ ಹೃದಯದಿಂದ ನಿನ್ನನ್ನು ಕೊಂಡಾಡುತ್ತೇನೆ; ನಿನ್ನ ಅದ್ಭುತ ಕಾರ್ಯಗಳನ್ನೆಲ್ಲಾ ತೋರಿಸುವೆನು.
9:2b.PSA.009.002 ನಿನ್ನಲ್ಲಿ ಸಂತೋಷಿಸಿ ಉತ್ಸಾಹಪಡುವೆನು; ಓ ಮಹೋ ನ್ನತನೇ, ನಿನ್ನ ಹೆಸರನ್ನು ಸ್ತುತಿಸಿ ಹಾಡುವೆನು.
9:3b.PSA.009.003 ನನ್ನ ಶತ್ರುಗಳು ಹಿಂದಕ್ಕೆ ತಿರುಗಿ ನಿನ್ನ ಸಮ್ಮುಖ ದಿಂದ ಬಿದ್ದು ನಾಶವಾಗುವರು.
9:4b.PSA.009.004 ನೀನು ನನ್ನ ನ್ಯಾಯ ವನ್ನೂ ವ್ಯಾಜ್ಯವನ್ನೂ ಸ್ಥಾಪಿಸಿದ್ದೀ. ನೀತಿಯುಳ್ಳ ನ್ಯಾಯಾ ಧಿಪತಿಯಾಗಿ ಸಿಂಹಾಸನದಲ್ಲಿ ಕೂತುಕೊಂಡಿದ್ದೀ.
9:5b.PSA.009.005 ನೀನು ಜನಾಂಗಗಳನ್ನು ಗದರಿಸಿ ದುಷ್ಟರನ್ನು ನಾಶ ಮಾಡಿದ್ದೀ; ಅವರ ಹೆಸರನ್ನು ಯುಗ ಯುಗಾಂತರ ಗಳ ವರೆಗೂ ಅಳಿಸಿ ಬಿಟ್ಟಿದ್ದೀ.
9:6b.PSA.009.006 ಓ ಶತ್ರುವೇ, ನಾಶನ ಗಳು ಸದಾಕಾಲಕ್ಕೆ ಮುಗಿದಿವೆ; ನೀನು ಪಟ್ಟಣಗಳನ್ನು ನಾಶಮಾಡಿದ್ದೀ; ಅವರ ಜ್ಞಾಪಕವು ಅವರೊಂದಿಗೆ ನಾಶವಾಯಿತು.
9:7b.PSA.009.007 ಆದರೆ ಕರ್ತನು ಸದಾ ಇರುವಾತನು; ಆತನು ನ್ಯಾಯಕ್ಕಾಗಿ ತನ್ನ ಸಿಂಹಾಸನವನ್ನು ಸಿದ್ಧಮಾಡಿದ್ದಾನೆ.
9:8b.PSA.009.008 ಆತನೇ ನೀತಿಯಿಂದ ಲೋಕಕ್ಕೆ ನ್ಯಾಯತೀರಿಸುವನು; ಆತನು ಪ್ರಜೆಗಳಿಗೆ ಯಥಾರ್ಥವಾಗಿ ನ್ಯಾಯತೀರ್ಪು ಕೊಡುವನು.
9:9b.PSA.009.009 ಕರ್ತನು ಕುಗ್ಗಿದವರಿಗೆ ಆಶ್ರಯವಾಗಿರುವನು, ಇಕ್ಕಟ್ಟಿನ ಸಮಯದಲ್ಲಿ ಸಹ ಆಶ್ರಯವಾಗಿರುವನು.
9:10b.PSA.009.010 ನಿನ್ನ ಹೆಸರನ್ನು ತಿಳಿದವರು ನಿನ್ನಲ್ಲಿ ಭರವಸೆ ಇಡು ವರು; ಓ ಕರ್ತನೇ, ನಿನ್ನನ್ನು ಹುಡುಕುವವರನ್ನು ನೀನು ತೊರೆದುಬಿಡಲಿಲ್ಲ.
9:11b.PSA.009.011 ಚೀಯೋನಿನಲ್ಲಿ ವಾಸಿಸುವ ಕರ್ತನನ್ನು ಕೀರ್ತಿಸಿರಿ; ಆತನ ಕ್ರಿಯೆಗಳನ್ನು ಜನಗಳಲ್ಲಿ ತಿಳಿಸಿರಿ.
9:12b.PSA.009.012 ಆತನು ರಕ್ತಾಪರಾಧವನ್ನು ವಿಚಾರಿಸುವಾಗ ಅವರನ್ನು ಜ್ಞಾಪಕಮಾಡಿಕೊಳ್ಳುವನು; ಆತನು ದೀನರ ಕೂಗನ್ನು ಮರೆತುಬಿಡನು.
9:13b.PSA.009.013 ಓ ಕರ್ತನೇ, ನನ್ನ ಮೇಲೆ ಕರುಣೆತೋರಿಸು; ನನ್ನನ್ನು ಹಗೆಮಾಡುವವರಿಂದ ನನಗೆ ಬಂದ ಶ್ರಮೆ ಯನ್ನು ನೋಡು. ಮರಣದ ಬಾಗಲುಗಳಿಂದ ನನ್ನನ್ನು ಎತ್ತುವಾತನೇ,
9:14b.PSA.009.014 ನಾನು ನಿನ್ನ ಸ್ತುತಿಯನ್ನೆಲ್ಲಾ ಚೀಯೋನಿನ ಮಗಳ ಬಾಗಲುಗಳಲ್ಲಿ ಸಾರುವಹಾಗೆ ನಿನ್ನ ರಕ್ಷಣೆಯಲ್ಲಿ ಉಲ್ಲಾಸಪಡುವೆನು.
9:15b.PSA.009.015 ಜನಾಂಗಗಳು ತಾವು ಅಗೆದ ಕುಣಿಯಲ್ಲಿ ತಾವೇ ಬಿದ್ದಿದ್ದಾರೆ; ಅವರು ಅಡಗಿಸಿಟ್ಟ ಬಲೆಯಲ್ಲಿ ಅವರ ಕಾಲು ಸಿಕ್ಕಿಕೊಂಡಿತು.
9:16b.PSA.009.016 ಕರ್ತನು ತಾನು ತೀರಿಸಿದ ನ್ಯಾಯತೀರ್ಪಿನಿಂದ ತನ್ನನ್ನು ಪ್ರಕಟಪಡಿಸಿಕೊಂಡಿ ದ್ದಾನೆ; ದುಷ್ಟನು ತನ್ನ ಕೈಕೆಲಸದಲ್ಲಿಯೇ ಸಿಕ್ಕಿಬಿದ್ದಿ ದ್ದಾನೆ. ಹಿಗ್ಗಾಯೋನ್. ಸೆಲಾ.
9:17b.PSA.009.017 ದುಷ್ಟರೂ ದೇವರನ್ನು ಮರೆಯುವ ಎಲ್ಲಾ ಜನಾಂಗಗಳೂ ನರಕಕ್ಕೆ ಇಳಿಯುವರು.
9:18b.PSA.009.018 ಆತನು ಬಡವನನ್ನು ಸದಾಕಾಲಕ್ಕೆ ಮರೆಯುವದಿಲ್ಲ. ಬಡವರ ನಿರೀಕ್ಷೆ ಎಂದೆಂದಿಗೂ ನಾಶವಾಗುವದಿಲ್ಲ.
9:19b.PSA.009.019 ಓ ಕರ್ತನೇ, ಏಳು; ಮನುಷ್ಯನು ಬಲಗೊಳ್ಳದೆ ಇರಲಿ; ನಿನ್ನ ಸಮ್ಮುಖದಲ್ಲಿ ಜನಾಂಗಗಳಿಗೆ ನ್ಯಾಯ ತೀರ್ವಿಕೆ ಆಗಲಿ.ಓ ಕರ್ತನೇ, ಅವರಿಗೆ ಭಯವನ್ನು ಹುಟ್ಟಿಸು; ಆಗ ಜನಾಂಗಗಳು ತಾವು ಮನುಷ್ಯರೇ ಎಂದು ತಿಳುಕೊಳ್ಳುವರು. ಸೆಲಾ.
9:20b.PSA.009.020 ಓ ಕರ್ತನೇ, ಅವರಿಗೆ ಭಯವನ್ನು ಹುಟ್ಟಿಸು; ಆಗ ಜನಾಂಗಗಳು ತಾವು ಮನುಷ್ಯರೇ ಎಂದು ತಿಳುಕೊಳ್ಳುವರು. ಸೆಲಾ.
10
10:1b.PSA.010.001 ಓ ಕರ್ತನೇ, ನೀನು ದೂರದಲ್ಲಿ ನಿಂತು ಕೊಳ್ಳುವದೂ ಕಷ್ಟಕಾಲಗಳಲ್ಲಿ ನಿನ್ನನ್ನು ಮರೆಮಾಡಿಕೊಳ್ಳುವದೂ ಯಾಕೆ?
10:2b.PSA.010.002 ದುಷ್ಟರು ಗರ್ವ ದಿಂದ ದೀನನನ್ನು ಹಿಂಸಿಸುತ್ತಾರೆ; ಅವರು ಕಲ್ಪಿಸಿದ ಯುಕ್ತಿಗಳಲ್ಲಿ ತಾವೇ ಹಿಡಿಯಲ್ಪಡಲಿ.
10:3b.PSA.010.003 ದುಷ್ಟನು ತನ್ನ ಹೃದಯದ ಆಶೆಗೋಸ್ಕರ ಹೊಗಳಿಕೊಳ್ಳುತ್ತಾನೆ; ಕರ್ತನು ಅಸಹ್ಯಪಡುವ ಲೋಭಿಯನ್ನು ಅವನು ಆಶೀರ್ವದಿಸುತ್ತಾನೆ.
10:4b.PSA.010.004 ದುಷ್ಟನು ತನ್ನ ಗರ್ವದ ಮುಖದಿಂದ ದೇವರನ್ನು ಹುಡುಕುವದಿಲ್ಲ; ಅವನ ಯೋಚನೆಗಳೆಲ್ಲಾ ದೇವ ರಿಲ್ಲದವುಗಳು.
10:5b.PSA.010.005 ಅವನ ಮಾರ್ಗಗಳು ಯಾವಾಗಲೂ ವ್ಯಸನಕರವಾಗಿವೆ; ನಿನ್ನ ನ್ಯಾಯತೀರ್ಪುಗಳು ಅವನ ದೃಷ್ಟಿಗೆ ನಿಲುಕದಷ್ಟು ಉನ್ನತವಾಗಿವೆ; ತನ್ನ ವೈರಿಗಳೆ ಲ್ಲರ ಮುಂದೆ ಉಬ್ಬಿಕೊಳ್ಳುತ್ತಾನೆ.
10:6b.PSA.010.006 ನಾನು ಕದಲು ವದಿಲ್ಲ; ನಾನು ಎಂದಿಗೂ ಕೇಡಿನಲ್ಲಿರುವದಿಲ್ಲ ಎಂದು ಅವನು ತನ್ನ ಹೃದಯದಲ್ಲಿ ಅಂದುಕೊಂಡಿದ್ದಾನೆ.
10:7b.PSA.010.007 ಅವನ ಬಾಯಿ ಶಾಪದಿಂದಲೂ ಮೋಸದಿಂದಲೂ ವಂಚನೆಯಿಂದಲೂ ತುಂಬಿದೆ; ಅವನ ನಾಲಿಗೆಯ ಕೆಳಗೆ ಕೇಡೂ ವ್ಯರ್ಥತೆಯೂ ಇವೆ.
10:8b.PSA.010.008 ಅವನು ಹೊಂಚು ಹಾಕುವ ಗ್ರಾಮಗಳ ಸ್ಥಳಗಳಲ್ಲಿ ಕೂತುಕೊಂಡು ಗುಪ್ತವಾದ ಸ್ಥಳಗಳಲ್ಲಿ ನಿರಪರಾಧಿಯನ್ನು ಕೊಲ್ಲು ತ್ತಾನೆ. ಅವನ ಕಣ್ಣುಗಳು ಗತಿಯಿಲ್ಲದವನನ್ನು ಹೊಂಚಿ ನೋಡು ತ್ತವೆ;
10:9b.PSA.010.009 ಗವಿಯಲ್ಲಿರುವ ಸಿಂಹದ ಹಾಗೆ ಮರೆಯಲ್ಲಿ ಹೊಂಚು ಹಾಕುತ್ತಾನೆ; ಬಡವನನ್ನು ಹಿಡಿ ಯುವದಕ್ಕೆ ಹೊಂಚು ಹಾಕುತ್ತಾನೆ; ಬಡವನನ್ನು ತನ್ನ ಬಲೆಯಲ್ಲಿ ಎಳೆದು ಹಿಡಿಯುತ್ತಾನೆ.
10:10b.PSA.010.010 ಅವನು ಕುಗ್ಗಿ ಬೊಗ್ಗುತ್ತಾನೆ; ಆದದರಿಂದ ಗತಿಯಿಲ್ಲದವರು ಅವನ ಬಲದಿಂದ ಬೀಳುತ್ತಾರೆ.
10:11b.PSA.010.011 ದೇವರು ಮರೆತು ಬಿಟ್ಟಿ ದ್ದಾನೆ; ತನ್ನ ಮುಖವನ್ನು ಮರೆಮಾಡುತ್ತಾನೆ; ಆತನು ಎಂದೂ ನೋಡನು ಎಂದು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ.
10:12b.PSA.010.012 ಓ ಕರ್ತನೇ, ಏಳು; ಓ ದೇವ ರೇ, ನಿನ್ನ ಕೈ ಎತ್ತು, ದೀನರನ್ನು ಮರೆತು ಬಿಡಬೇಡ.
10:13b.PSA.010.013 ದುಷ್ಟನು ದೇವರನ್ನು ಅಲಕ್ಷ್ಯಮಾಡುವದು ಯಾಕೆ? --ನೀನು ಅದನ್ನು ವಿಚಾರಿಸುವದಿಲ್ಲವೆಂದು ಅವನು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ.
10:14b.PSA.010.014 ನೀನು ಅದನ್ನು ನೋಡಿದ್ದೀ; ನಿನ್ನ ಕೈಯಿಂದ ಪ್ರತಿಫಲಕೊಡು ವದಕ್ಕೆ ಅವನ ಕುಯುಕ್ತಿಯನ್ನೂ ಹಗೆತನವನ್ನೂ ದೃಷ್ಟಿ ಸುತ್ತೀ. ಗತಿಯಿಲ್ಲದವನು ನಿನಗೆ ತನ್ನನ್ನು ಒಪ್ಪಿಸುತ್ತಾನೆ; ದಿಕ್ಕಿಲ್ಲದವನಿಗೆ ಸಹಾಯಕನು ನೀನೇ.
10:15b.PSA.010.015 ದುಷ್ಟನ ಮತ್ತು ಕೆಡುಕನ ತೋಳನ್ನು ಮುರಿ; ಅದು ಸಿಕ್ಕದೆ ಹೋಗುವ ವರೆಗೂ ಅವನ ದುಷ್ಟತ್ವ ವನ್ನು ನೀನು ಹುಡುಕು.
10:16b.PSA.010.016 ಕರ್ತನು ಯುಗ ಯುಗಾಂತರಗಳಿಗೂ ಅರಸನಾಗಿದ್ದಾನೆ; ಅನ್ಯಜನಾಂಗಗಳು ಆತನ ದೇಶದೊ ಳಗಿಂದ ನಾಶವಾದರು.
10:17b.PSA.010.017 ಕರ್ತನೇ, ದೀನರ ಆಶೆ ಯನ್ನು ಕೇಳಿದ್ದೀ; ನೀನು ಅವರ ಹೃದಯವನ್ನು ಸಿದ್ಧ ಪಡಿಸಿ ಅವರ ಮೊರೆಗೆ ಕಿವಿಗೊಡುತ್ತೀ.ಭೂಮಿಯ ಮನುಷ್ಯನು ಇನ್ನು ಭಯಪಡಿಸದ ಹಾಗೆ ದಿಕ್ಕಿಲ್ಲದ ವರಿಗೂ ಕುಗ್ಗಿದವರಿಗೂ ನ್ಯಾಯತೀರಿಸುವದಕ್ಕೆ ಕಿವಿಗೊಟ್ಟಿದ್ದೀ.
10:18b.PSA.010.018 ಭೂಮಿಯ ಮನುಷ್ಯನು ಇನ್ನು ಭಯಪಡಿಸದ ಹಾಗೆ ದಿಕ್ಕಿಲ್ಲದ ವರಿಗೂ ಕುಗ್ಗಿದವರಿಗೂ ನ್ಯಾಯತೀರಿಸುವದಕ್ಕೆ ಕಿವಿಗೊಟ್ಟಿದ್ದೀ.
11
11:1b.PSA.011.001 ಕರ್ತನಲ್ಲಿ ನಾನು ಭರವಸವನ್ನು ಇಟ್ಟಿದ್ದೇನೆ; ಪಕ್ಷಿಯಂತೆ ನಿಮ್ಮ ಬೆಟ್ಟಕ್ಕೆ ಓಡು ಎಂದು ನನ್ನ ಪ್ರಾಣಕ್ಕೆ ನೀವು ಹೇಳುವದು ಹೇಗೆ?
11:2b.PSA.011.002 ಇಗೋ, ದುಷ್ಟರು ಬಿಲ್ಲು ಬೊಗ್ಗಿಸಿ ಯಥಾರ್ಥ ಹೃದಯವುಳ್ಳವರ ಮೇಲೆ ಗುಪ್ತವಾಗಿ ಎಸೆಯುವದಕ್ಕೆ ತಮ್ಮ ಬಾಣವನ್ನು ಬಿಲ್ಲಿಗೆ ಹೂಡಿ ಸಿದ್ಧಮಾಡುತ್ತಾರೆ.
11:3b.PSA.011.003 ಅಸ್ತಿವಾರಗಳೇ ನಿರ್ಮೂಲವಾದರೆ ನೀತಿವಂತನು ಏನು ಮಾಡಬಹುದು?
11:4b.PSA.011.004 ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಕರ್ತನ ಸಿಂಹಾಸನವು ಪರಲೋಕದಲ್ಲಿ ಅದೆ; ಆತನ ಕಣ್ಣುಗಳು ದೃಷ್ಟಿಸುತ್ತವೆ; ಆತನ ರೆಪ್ಪೆಗಳು ಮನು ಷ್ಯನ ಮಕ್ಕಳನ್ನು ಶೋಧಿಸುತ್ತವೆ;
11:5b.PSA.011.005 ಕರ್ತನು ನೀತಿ ವಂತನನ್ನು ಶೋಧಿಸುತ್ತಾನೆ; ಆದರೆ ದುಷ್ಟನನ್ನೂ ಬಲಾತ್ಕಾರ ಪ್ರಿಯನನ್ನೂ ಆತನ ಪ್ರಾಣವು ಹಗೆ ಮಾಡುತ್ತದೆ.
11:6b.PSA.011.006 ದುಷ್ಟರ ಮೇಲೆ ಉರ್ಲುಗಳನ್ನೂ ಬೆಂಕಿಯನ್ನೂ ಗಂಧಕವನ್ನೂ ಉರಿಗಾಳಿಯನ್ನೂ ಆತನು ಸುರಿಸುವನು. ಇದು ಅವರ ಪಾನದ ಬಟ್ಟ ಲಾಗಿರುವದು;ನೀತಿಯ ಕರ್ತನು ನೀತಿಯನ್ನು ಪ್ರೀತಿ ಮಾಡುತ್ತಾನೆ; ಆತನ ಮುಖವು ಯಥಾರ್ಥನನ್ನು ದೃಷ್ಟಿಸುತ್ತದೆ.
11:7b.PSA.011.007 ನೀತಿಯ ಕರ್ತನು ನೀತಿಯನ್ನು ಪ್ರೀತಿ ಮಾಡುತ್ತಾನೆ; ಆತನ ಮುಖವು ಯಥಾರ್ಥನನ್ನು ದೃಷ್ಟಿಸುತ್ತದೆ.
12
12:1b.PSA.012.001 ಕರ್ತನೇ, ಸಹಾಯಮಾಡು; ಯಾಕಂದರೆ ಭಕ್ತನು ಮುಗಿದು ಹೋಗುತ್ತಾನೆ; ನಂಬಿಗಸ್ತರು ಮನುಷ್ಯನ ಮಕ್ಕಳೊಳಗಿಂದ ಇಲ್ಲದೆ ಹೋಗುತ್ತಾರೆ.
12:2b.PSA.012.002 ಒಬ್ಬೊಬ್ಬನು ತನ್ನ ನೆರೆಯವನ ಸಂಗಡ ವ್ಯರ್ಥವಾದ ಮಾತನ್ನು ಆಡುತ್ತಾನೆ; ಮುಖಸ್ತುತಿಯ ತುಟಿಯಿಂದಲೂ ವಂಚನೆಯ ಹೃದಯದಿಂದಲೂ ಅವರು ಮಾತನಾಡುತ್ತಾರೆ.
12:3b.PSA.012.003 ಮುಖಸ್ತುತಿಯ ಎಲ್ಲಾ ತುಟಿಗಳನ್ನೂ ಗರ್ವದಿಂದ ಮಾತನಾಡುವ ನಾಲಿಗೆಯನ್ನೂ ಕರ್ತನು ಕಡಿದು ಬಿಡುವನು.
12:4b.PSA.012.004 ಅವರು--ನಮ್ಮ ನಾಲಿಗೆಯಿಂದ ನಾವು ಬಲಗೊಳ್ಳುವೆವು; ನಮ್ಮ ತುಟಿಗಳು ನಮ್ಮವೇ; ನಮಗೆ ಪ್ರಭುವು ಯಾರು ಅನ್ನುತ್ತಾರೆ.
12:5b.PSA.012.005 ಬಡವರ ವ್ಯಥೆಗೋಸ್ಕರವೂ ಗತಿಯಿಲ್ಲದವರ ನರ ಳುವಿಕೆಗೋಸ್ಕರವೂ ಈಗ ನಾನು ಏಳುವೆನು ಎಂದು ಕರ್ತನು ಹೇಳುತ್ತಾನೆ; ಉಬ್ಬಿಕೊಂಡವನಿಂದ ನಾನು ಬಡವನನ್ನು ಕಾಪಾಡುವೆನು.
12:6b.PSA.012.006 ಕರ್ತನ ವಾಕ್ಯಗಳು ಶುದ್ಧವಾಕ್ಯಗಳಾಗಿವೆ: ಮಣ್ಣಿನ ಕುಲುಮೆಯಲ್ಲಿ ಏಳು ಸಾರಿ ಕರಗಿ ಪುಟಕ್ಕೆ ಹಾಕಿದ ಬೆಳ್ಳಿಯಂತೆ ಇವೆ.
12:7b.PSA.012.007 ಓ ಕರ್ತನೇ, ನೀನು ಅವರನ್ನು ಕಾಪಾಡಿ ಯುಗ ಯುಗಕ್ಕೂ ಈ ಸಂತತಿಯಿಂದ ಅವರನ್ನು ಬಿಡಿಸಿ ಕಾಯುವಿ.ಅತಿ ನೀಚರು ಹೆಚ್ಚಿಸಲ್ಪಟ್ಟಾಗ ದುಷ್ಟರು ಪ್ರತಿಯೊಂದು ಕಡೆಗೂ ತಿರುಗಾಡುತ್ತಾರೆ.
12:8b.PSA.012.008 ಅತಿ ನೀಚರು ಹೆಚ್ಚಿಸಲ್ಪಟ್ಟಾಗ ದುಷ್ಟರು ಪ್ರತಿಯೊಂದು ಕಡೆಗೂ ತಿರುಗಾಡುತ್ತಾರೆ.
13
13:1b.PSA.013.001 ಓ ಕರ್ತನೇ, ಎಷ್ಟರ ವರೆಗೆ ನನ್ನನ್ನು ಮರೆಯುವಿ? ಎಂದೆಂದಿಗೂ ಮರೆಯು ವಿಯೋ? ಎಷ್ಟರ ವರೆಗೆ ನಿನ್ನ ಮುಖವನ್ನು ನನ್ನಿಂದ ಮರೆಮಾಡುವಿ?
13:2b.PSA.013.002 ಎಷ್ಟರ ವರೆಗೆ ನನ್ನ ಪ್ರಾಣದಲ್ಲಿ ಆಲೋಚನೆಗಳನ್ನೂ ಪ್ರತಿದಿನ ನನ್ನ ಹೃದಯದಲ್ಲಿ ದುಃಖವನ್ನೂ ಇಟ್ಟುಕೊಳ್ಳಬೇಕು? ಎಷ್ಟರ ವರೆಗೆ ನನ್ನ ಶತ್ರುವು ನನ್ನ ಮೇಲೆ ಹೆಚ್ಚಿಸಿಕೊಳ್ಳುವನು?
13:3b.PSA.013.003 ನನ್ನ ದೇವರಾದ ಓ ಕರ್ತನೇ, ದೃಷ್ಟಿಸಿ ನನಗೆ ಉತ್ತರಕೊಡು; ನಾನು ಮರಣದ ನಿದ್ದೆಮಾಡದ ಹಾಗೆಯೂ
13:4b.PSA.013.004 ನನ್ನ ಶತ್ರುವು--ಅವನನ್ನು ಗೆದ್ದೆನೆಂದು ಹೇಳದ ಹಾಗೆಯೂ ನಾನು ಕದಲುವಾಗ ನನ್ನನ್ನು ಹಿಂಸಿಸುವವರು ಉಲ್ಲಾಸಪಡದ ಹಾಗೆಯೂ ನನ್ನ ಕಣ್ಣುಗಳನ್ನು ಬೆಳಗುವ ಹಾಗೆ ಮಾಡು.
13:5b.PSA.013.005 ನಾನಾದರೋ ನಿನ್ನ ಕರುಣೆಯಲ್ಲಿ ಭರವಸವಿ ಟ್ಟಿದ್ದೇನೆ; ನಿನ್ನ ರಕ್ಷಣೆಯಲ್ಲಿ ನನ್ನ ಹೃದಯವು ಉಲ್ಲಾ ಸಪಡುವದು.ನಾನು ಕರ್ತನಿಗೆ ಹಾಡುವೆನು; ಆತನು ನನಗೆ ಮೇಲು ಮಾಡಿದ್ದಾನೆ.
13:6b.PSA.013.006 ನಾನು ಕರ್ತನಿಗೆ ಹಾಡುವೆನು; ಆತನು ನನಗೆ ಮೇಲು ಮಾಡಿದ್ದಾನೆ.
14
14:1b.PSA.014.001 ದೇವರಿಲ್ಲವೆಂದು ಮೂರ್ಖನು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ. ಅವರು ಕೆಟ್ಟುಹೋಗಿ ಅಸಹ್ಯವಾದ ಕೃತ್ಯಗಳನ್ನು ಮಾಡಿದ್ದಾರೆ; ಒಳ್ಳೇದನ್ನು ಮಾಡುವವನು ಯಾವನೂ ಇಲ್ಲ.
14:2b.PSA.014.002 ದೇವರನ್ನು ಹುಡುಕುವ ಬುದ್ಧಿವಂತನು ಇದ್ದಾನೋ ಎಂದು ನೋಡುವದಕ್ಕೆ ಕರ್ತನು ಆಕಾಶದಿಂದ ಮನುಷ್ಯನ ಮಕ್ಕಳ ಮೇಲೆ ಕಣ್ಣಿಟ್ಟನು.
14:3b.PSA.014.003 ಅವರೆಲ್ಲರೂ ತಪ್ಪಿಹೋಗಿದ್ದಾರೆ, ಅವರೆಲ್ಲರೂ ಏಕವಾಗಿ ಹೊಲೆ ಯಾಗಿದ್ದಾರೆ; ಒಳ್ಳೆಯದನ್ನು ಮಾಡುವವನು ಇಲ್ಲ; ಒಬ್ಬನಾದರೂ ಇಲ್ಲ.
14:4b.PSA.014.004 ಕರ್ತನನ್ನು ಪ್ರಾರ್ಥಿಸದೆ ರೊಟ್ಟಿಯನ್ನೋ ಎಂಬಂತೆ ನನ್ನ ಜನರನ್ನು ತಿಂದು ಅಪರಾಧಮಾಡಿದವರಿಗೆ ತಿಳುವಳಿಕೆಯಿಲ್ಲವೋ?
14:5b.PSA.014.005 ಅಲ್ಲಿ ಅವರು ಭಯಭ್ರಾಂತ ರಾದರು; ಯಾಕಂದರೆ ದೇವರು ನೀತಿವಂತರ ಸಂತತಿ ಯಲ್ಲಿ ಇದ್ದಾನೆ.
14:6b.PSA.014.006 ಕರ್ತನು ಬಡವನ ಆಶ್ರಯವಾಗಿರು ವದರಿಂದ ನೀವು ಅವನ ಆಲೋಚನೆಯನ್ನು ನಾಚಿಕೆ ಪಡಿಸಿದ್ದೀರಿ.ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬರಲಿ; ಕರ್ತನು ತನ್ನ ಜನರನ್ನು ಸೆರೆಯಿಂದ ತಿರಿಗಿ ಬರಮಾಡುವಾಗ ಯಾಕೋಬನು ಉಲ್ಲಾಸಿ ಸುವನು, ಇಸ್ರಾಯೇಲನು ಸಂತೋಷಿಸುವನು.
14:7b.PSA.014.007 ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬರಲಿ; ಕರ್ತನು ತನ್ನ ಜನರನ್ನು ಸೆರೆಯಿಂದ ತಿರಿಗಿ ಬರಮಾಡುವಾಗ ಯಾಕೋಬನು ಉಲ್ಲಾಸಿ ಸುವನು, ಇಸ್ರಾಯೇಲನು ಸಂತೋಷಿಸುವನು.
15
15:1b.PSA.015.001 ಕರ್ತನೇ, ನಿನ್ನ ಗುಡಾರದಲ್ಲಿ ತಂಗುವವನು ಯಾರು? ನಿನ್ನ ಪರಿಶುದ್ಧ ಪರ್ವತ ದಲ್ಲಿ ವಾಸಮಾಡುವವನು ಯಾರು?
15:2b.PSA.015.002 ಯಥಾರ್ಥವಾಗಿ ನಡೆದು ನೀತಿಯನ್ನು ನಡಿಸಿ ತನ್ನ ಹೃದಯದಲ್ಲಿ ಸತ್ಯವನ್ನಾಡುವವನೇ.
15:3b.PSA.015.003 ಅವನು ತನ್ನ ನಾಲಿಗೆಯಿಂದ ಚಾಡಿ ಹೇಳುವದಿಲ್ಲ; ತನ್ನ ನೆರೆಯವನನ್ನು ನಿಂದಿಸು ವದಿಲ್ಲ;
15:4b.PSA.015.004 ಅವನ ಕಣ್ಣುಗಳಿಗೆ ನೀಚನು ತಿರಸ್ಕರಿಸಲ್ಪ ಟ್ಟಿದ್ದಾನೆ. ಆದರೆ ಕರ್ತನಿಗೆ ಭಯಪಡುವವರನ್ನು ಗೌರವಿಸುತ್ತಾನೆ, ಆಣೆಯಿಂದ ನಷ್ಟವಾದರೂ ಬದಲಾ ಯಿಸದವನು.ತನ್ನ ಹಣವನ್ನು ಬಡ್ಡಿಗೆ ಕೊಡುವದಿಲ್ಲ; ನಿರಪರಾಧಿಗೆ ವಿರೋಧವಾಗಿ ಲಂಚ ತಕ್ಕೊಳ್ಳುವದಿಲ್ಲ. ಇವುಗಳನ್ನು ಮಾಡುವವನು ಎಂದೆಂದಿಗೂ ಕದಲದೆ ಇರುವನು.
15:5b.PSA.015.005 ತನ್ನ ಹಣವನ್ನು ಬಡ್ಡಿಗೆ ಕೊಡುವದಿಲ್ಲ; ನಿರಪರಾಧಿಗೆ ವಿರೋಧವಾಗಿ ಲಂಚ ತಕ್ಕೊಳ್ಳುವದಿಲ್ಲ. ಇವುಗಳನ್ನು ಮಾಡುವವನು ಎಂದೆಂದಿಗೂ ಕದಲದೆ ಇರುವನು.
16
16:1b.PSA.016.001 ಓ ದೇವರೇ, ನನ್ನನ್ನು ಕಾಪಾಡು; ನಿನ್ನಲ್ಲಿ ಭರವಸವಿಟ್ಟಿದ್ದೇನೆ.
16:2b.PSA.016.002 ನೀನೇ ನನ್ನ ಕರ್ತನು; ನನ್ನ ಒಳ್ಳೇತನ ನಿನಗೆ ಮಾತ್ರವಲ್ಲದೆ
16:3b.PSA.016.003 ಭೂಮಿಯಲ್ಲಿರುವ ಪರಿಶುದ್ಧರಿಗೂ ನನ್ನ ಸಂತೋಷ ವಾಗಿರುವ ಮುಖ್ಯಸ್ಥರಿಗೂ ಸೇರುತ್ತದೆಂದು ಓ ನನ್ನ ಆತ್ಮವೇ, ನೀನು ಕರ್ತನಿಗೆ ಹೇಳಿದ್ದೀ.
16:4b.PSA.016.004 ಬೇರೆ ದೇವ ರಗಳ ಹಿಂದೆ ತ್ವರೆಪಡುವವರ ವ್ಯಥೆಗಳು ಹೆಚ್ಚಾಗು ವವು. ಅವರ ರಕ್ತದ ಅರ್ಪಣೆಗಳನ್ನು ನಾನು ಅರ್ಪಿ ಸುವದಿಲ್ಲ, ಅವರ ಹೆಸರುಗಳನ್ನೂ ನನ್ನ ತುಟಿಗಳಲ್ಲಿ ಎತ್ತೆನು.
16:5b.PSA.016.005 ಕರ್ತನು ನನ್ನ ಪಾಲಿನ ಮತ್ತು ನನ್ನ ಪಾತ್ರೆಯ ಭಾಗವಾಗಿದ್ದಾನೆ; ನೀನು ನನ್ನ ಸ್ವಾಸ್ತ್ಯವನ್ನು ಸ್ಥಿರವಾಗಿ ಕಾಪಾಡುತ್ತೀ.
16:6b.PSA.016.006 ರಮ್ಯ ಸ್ಥಳಗಳಲ್ಲಿ ನನಗೆ ಪಾಲು ಸಿಕ್ಕಿತು, ಹೌದು, ರಮಣೀಯವಾದ ಬಾಧ್ಯತೆ ನನಗೆ ಅದೆ.
16:7b.PSA.016.007 ನನಗೆ ಆಲೋಚನೆ ಹೇಳಿದ ಕರ್ತನನ್ನು ನಾನು ಸ್ತುತಿಸುವೆನು, ರಾತ್ರಿಯಲ್ಲಿಯೂ ನನ್ನ ಅಂತರಿಂದ್ರಿ ಯಗಳು ನನಗೆ ಬೋಧಿಸುತ್ತವೆ.
16:8b.PSA.016.008 ನಾನು ಕರ್ತನನ್ನು ಯಾವಾಗಲೂ ನನ್ನ ಮುಂದೆ ಇಟ್ಟುಕೊಂಡಿದ್ದೇನೆ. ಆತನು ನನ್ನ ಬಲಗಡೆಯಲ್ಲಿ ಇರುವದರಿಂದ ನಾನು ಕದಲೆನು.
16:9b.PSA.016.009 ಆದದರಿಂದ ನನ್ನ ಹೃದಯವು ಸಂತೋಷಿಸಿ ನನ್ನ ಹೆಮ್ಮೆಯು ಉಲ್ಲಾಸಪಡುತ್ತದೆ; ನನ್ನ ಶರೀರವು ಸಹ ನಿರೀಕ್ಷೆಯಿಂದ ವಿಶ್ರಾಂತಿಸುವದು.
16:10b.PSA.016.010 ಯಾಕಂದರೆ ನೀನು ನನ್ನ ಆತ್ಮವನ್ನು ನರಕದಲ್ಲಿ ಬಿಟ್ಟುಬಿಡುವದಿಲ್ಲ; ನಿನ್ನ ಪರಿಶುದ್ಧನ ಕೊಳೆಯುವಿಕೆಯನ್ನು ನೋಡ ಗೊಡಿಸುವದಿಲ್ಲ.ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
16:11b.PSA.016.011 ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
17
17:1b.PSA.017.001 ಓ ಕರ್ತನೇ, ನ್ಯಾಯವನ್ನು ಕೇಳು; ನನ್ನ ಮೊರೆಯನ್ನು ಆಲೈಸು; ನನ್ನ ಪ್ರಾರ್ಥನೆಗೆ ಕಿವಿಗೊಡು; ಅದು ಮೋಸದ ತುಟಿಗಳಿಂದ ಬಂದ ದ್ದಲ್ಲ.
17:2b.PSA.017.002 ನಿನ್ನ ಸನ್ನಿಧಿಯೊಳಗಿಂದ ನನಗೆ ನ್ಯಾಯತೀರ್ಪು ಹೊರಬರಲಿ; ನಿನ್ನ ಕಣ್ಣುಗಳು ನ್ಯಾಯವಾದವುಗಳನ್ನು ದೃಷ್ಟಿಸಲಿ.
17:3b.PSA.017.003 ನೀನು ನನ್ನ ಹೃದಯವನ್ನು ಶೋಧಿಸಿದ್ದೀ, ರಾತ್ರಿಯಲ್ಲಿ ನನ್ನನ್ನು ದರ್ಶಿಸಿದ್ದೀ; ನನ್ನನ್ನು ಪುಟಕ್ಕೆ ಹಾಕಿ ಏನೂ ಕಂಡುಕೊಳ್ಳಲಿಲ್ಲ. ನನ್ನ ಬಾಯಿ ಅತಿ ಕ್ರಮಿಸದಂತೆ ನಾನು ನಿಶ್ಚಯ ಮಾಡಿದ್ದೇನೆ.
17:4b.PSA.017.004 ಮನು ಷ್ಯರ ಕ್ರಿಯೆಗಳ ವಿಷಯವಾಗಿ ನಿನ್ನ ತುಟಿಗಳ ಮಾತಿ ನಿಂದ ನಾಶಮಾಡುವವನ ಹಾದಿಗಳಿಗೆ ನನ್ನನ್ನು ತಪ್ಪಿಸಿ ಕಾಪಾಡಿಕೊಂಡೆನು.
17:5b.PSA.017.005 ನನ್ನ ಹೆಜ್ಜೆಗಳು ಜಾರದ ಹಾಗೆ ನನ್ನ ನಡೆಗಳನ್ನು ನಿನ್ನ ದಾರಿಯಲ್ಲಿ ಸ್ಥಿರಪಡಿಸು.
17:6b.PSA.017.006 ಓ ದೇವರೇ, ನನಗೆ ಉತ್ತರ ಕೊಡುವದರಿಂದ ನಾನು ನಿನ್ನನ್ನು ಬೇಡಿಕೊಂಡಿದ್ದೇನೆ; ಯಾಕಂದರೆ ನಿನ್ನ ಕಿವಿಯನ್ನು ನನ್ನ ಕಡೆ ಆಲಿಸಿ ನನ್ನ ಮಾತನ್ನು ಕೇಳು.
17:7b.PSA.017.007 ನಿನ್ನಲ್ಲಿ ಭರವಸವಿಟ್ಟವರ ವಿರೋಧವಾಗಿ ಏಳುವ ದರಿಂದ ನೀನು ನಿನ್ನ ಬಲಗೈಯಿಂದ ರಕ್ಷಿಸುವಾತನೇ, ಆಶ್ಚರ್ಯವಾದ ನಿನ್ನ ಪ್ರೀತಿ ಕರುಣೆಯನ್ನು ತೋರಿಸು.
17:8b.PSA.017.008 ಕಣ್ಣುಗುಡ್ಡಿನ ಹಾಗೆ ನನ್ನನ್ನು ಕಾಪಾಡು.
17:9b.PSA.017.009 ನಿನ್ನ ರೆಕ್ಕೆ ಗಳ ನೆರಳಿನಲ್ಲಿ ನನ್ನನ್ನು ಮರೆಮಾಡು, ನನ್ನನ್ನು ಬಾಧಿ ಸುವ ದುಷ್ಟರಿಗೂ ನನ್ನನ್ನು ಸುತ್ತಿಕೊಳ್ಳುವ ಪ್ರಾಣ ಶತ್ರುಗಳಿಗೂ ಸಿಕ್ಕದಂತೆ ತಪ್ಪಿಸುವಿ.
17:10b.PSA.017.010 ಅವರು ತಮ್ಮ ಕೊಬ್ಬಿನಿಂದ ಸೊಕ್ಕೇರಿದ್ದಾರೆ; ತಮ್ಮ ಗರ್ವದ ಬಾಯಿ ಯಿಂದ ಮಾತನಾಡುತ್ತಾರೆ.
17:11b.PSA.017.011 ನಮ್ಮ ಹೆಜ್ಜೆಗಳಲ್ಲಿ ಈಗ ನಮ್ಮನ್ನು ಸುತ್ತಿಕೊಂಡಿದ್ದಾರೆ; ತಮ್ಮ ದೃಷ್ಟಿಯನ್ನು ಭೂಮಿಯ ಮೇಲೆ ಇಡುತ್ತಾರೆ.
17:12b.PSA.017.012 ಅವನು ತನ್ನ ಬೇಟೆಯ ದುರಾಶೆಯಿಂದಿರುವ ಸಿಂಹದ ಹಾಗೆಯೂ ಗುಪ್ತವಾದ ಸ್ಥಳಗಳಲ್ಲಿ ಹೊಂಚು ಹಾಕಿರುವ ಸಿಂಹದ ಮರಿಯ ಹಾಗೆಯೂ ಇದ್ದಾನೆ.
17:13b.PSA.017.013 ಓ ಕರ್ತನೇ, ಎದ್ದು ಅವನನ್ನು ನಿರಾಶೆಗೊಳಿಸಿ ಕೆಡವಿಬಿಡು. ದುಷ್ಟರ ಕೈಯೊಳಗಿಂದ ನಿನ್ನ ಕತ್ತಿಯ ಮೂಲಕ ನನ್ನನ್ನು ರಕ್ಷಿಸು.
17:14b.PSA.017.014 ಓ ಕರ್ತನೇ, ನಿನ್ನ ಕೈಚಾಚಿ ಈ ಮನುಷ್ಯರಿಂದ ಅಂದರೆ ಜೀವನದಲ್ಲಿ ತಮ್ಮ ಪಾಲಿಗಿರುವ ಈ ಲೋಕದ ಜನರಿಂದ ನನ್ನನ್ನು ಪಾರುಮಾಡು. ಅವರ ಹೊಟ್ಟೆಯನ್ನು ಮರೆಯಾದ ನಿನ್ನ ನಿಕ್ಷೇಪದಿಂದ ತುಂಬಿಸುತ್ತೀ; ಅವರು ಮಕ್ಕಳಿಂದ ತೃಪ್ತರಾಗಿ ತಮ್ಮ ಮಿಕ್ಕ ಆಸ್ತಿಯನ್ನು ತಮ್ಮ ಶಿಶುಗಳಿಗೆ ಉಳಿಸುತ್ತಾರೆ.ನಾನಾದರೋ ನೀತಿಯಲ್ಲಿ ನಿನ್ನ ಮುಖವನ್ನು ದೃಷ್ಟಿಸುವೆನು; ನಾನು ಎಚ್ಚರವಾದಾಗ ನಿನ್ನ ಹೋಲಿಕೆಯೊಂದಿಗೆ ತೃಪ್ತಿಹೊಂದುವೆನು.
17:15b.PSA.017.015 ನಾನಾದರೋ ನೀತಿಯಲ್ಲಿ ನಿನ್ನ ಮುಖವನ್ನು ದೃಷ್ಟಿಸುವೆನು; ನಾನು ಎಚ್ಚರವಾದಾಗ ನಿನ್ನ ಹೋಲಿಕೆಯೊಂದಿಗೆ ತೃಪ್ತಿಹೊಂದುವೆನು.
18
18:1b.PSA.018.001 ನನ್ನ ಬಲವಾಗಿರುವ ಓ ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇನೆ.
18:2b.PSA.018.002 ಕರ್ತನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನನ್ನು ತಪ್ಪಿಸು ವಾತನೂ ನನ್ನ ದೇವರೂ ನಾನು ಭರವಸವಿಡುವ ನನ್ನ ಬಲವೂ ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ನನ್ನ ಉನ್ನತವಾದ ದುರ್ಗವೂ ಆಗಿದ್ದಾನೆ.
18:3b.PSA.018.003 ಸ್ತುತಿಸತಕ್ಕ ಕರ್ತನಿಗೆ ನಾನು ಮೊರೆಯಿಡುತ್ತೇನೆ; ಹೀಗೆ ನಾನು ನನ್ನ ಶತ್ರುಗಳೊಳಗಿಂದ ರಕ್ಷಿಸಲ್ಪಡುತ್ತೇನೆ.
18:4b.PSA.018.004 ಮರಣದ ದುಃಖಗಳು ನನ್ನನ್ನು ಆವರಿಸಿಕೊಂಡವು, ಭಕ್ತಿಹೀನರ ಪ್ರವಾಹಗಳು ನನ್ನನ್ನು ಹೆದರಿಸಿದವು.
18:5b.PSA.018.005 ಪಾತಾಳದ ದುಃಖಗಳು ನನ್ನನ್ನು ಸುತ್ತಿಕೊಂಡವು; ಮರಣದ ನೇಣುಗಳು ನನ್ನನ್ನು ಸುತ್ತಿದವು.
18:6b.PSA.018.006 ನನ್ನ ಇಕ್ಕಟ್ಟಿನಲ್ಲಿ ಕರ್ತನನ್ನು ಬೇಡಿದೆನು; ನನ್ನ ದೇವರಿಗೆ ಮೊರೆಯಿಟ್ಟೆನು; ಆತನು ತನ್ನ ಮಂದಿರದೊಳಗಿಂದ ನನ್ನ ಸ್ವರವನ್ನು ಕೇಳಿದನು; ನನ್ನ ಮೊರೆಯು ಆತನ ಸನ್ನಿಧಿಗೂ ಆತನ ಕಿವಿಗಳಲ್ಲಿಯೂ ಮುಟ್ಟಿತು.
18:7b.PSA.018.007 ಆಗ ಆತನು ಕೋಪಗೊಂಡಿದ್ದನು. ಭೂಮಿಯು ಕದಲಿ ಕಂಪಿಸಿತು; ಪರ್ವತಗಳ ಅಸ್ತಿವಾರಗಳು ಸಹ ನಡುಗಿ ಕದಲಿದವು;
18:8b.PSA.018.008 ಆತನ ಮೂಗಿನಿಂದ ಹೊಗೆ ಎದ್ದು ಆತನ ಬಾಯಿಯೊಳಗಿಂದ ಬೆಂಕಿ ದಹಿಸಿತು; ಕೆಂಡಗಳು ಅದರಿಂದ ಉರಿದವು.
18:9b.PSA.018.009 ಆತನು ಆಕಾಶ ಗಳನ್ನು ಬೊಗ್ಗಿಸಿ ಇಳಿದನು; ಆತನ ಪಾದಗಳ ಕೆಳಗೆ ಕಾರ್ಗತ್ತಲು ಇತ್ತು.
18:10b.PSA.018.010 ಆತನು ಕೆರೂಬಿನ ಮೇಲೆ ಕೂತು ಹಾರಿದನು; ಹೌದು, ಗಾಳಿಯ ರೆಕ್ಕೆಗಳ ಮೇಲೆ ಹಾರಿದನು.
18:11b.PSA.018.011 ಕತ್ತಲನ್ನು ತನಗೆ ಮರೆಯ ಸ್ಥಳವಾಗಿ ಯೂ ಕತ್ತಲಿನ ನೀರುಗಳನ್ನು ಆಕಾಶದ ಮಂದವಾದ ಮೋಡಗಳನ್ನು ತನ್ನ ಸುತ್ತಲು ಡೇರೆಯಾಗಿಯೂ ಮಾಡಿ ದನು.
18:12b.PSA.018.012 ಆತನ ಮುಂದಿದ್ದ ಪ್ರಕಾಶದಿಂದ ಆತನ ಮಂದವಾದ ಮೋಡಗಳೂ ಕಲ್ಮಳೆಗಳೂ ಉರಿಗೆಂಡ ಗಳೂ ಹಾದು ಹೋದವು.
18:13b.PSA.018.013 ಕರ್ತನು ಆಕಾಶಗಳಲ್ಲಿ ಗುಡುಗಿದನು; ಮಹೋನ್ನತನು ಕಲ್ಮಳೆಯಿಂದಲೂ ಉರಿಗೆಂಡಗಳಿಂದಲೂ ತನ್ನ ಶಬ್ದವನ್ನು ಕೊಟ್ಟನು
18:14b.PSA.018.014 ಹೌದು, ತನ್ನ ಬಾಣಗಳನ್ನು ಕಳುಹಿಸಿ ಅವರನ್ನು ಚದುರಿಸಿದನು; ಮಿಂಚುಗಳನ್ನೆಸೆದು ಅವರನ್ನು ಗಲಿಬಿಲಿ ಮಾಡಿದನು.
18:15b.PSA.018.015 ಓ ಕರ್ತನೇ, ನಿನ್ನ ಗದರಿಕೆಯಿಂದಲೂ ನಿನ್ನ ಮೂಗಿನ ಶ್ವಾಸದ ಗಾಳಿಯಿಂದಲೂ ನೀರಿನ ಕಾಲುವೆಗಳ ನೆಲೆಯು ಕಾಣಬಂದು ಭೂಮಿಯ ಅಸ್ತಿವಾರಗಳು ಬೈಲಾದವು.
18:16b.PSA.018.016 ಆತನು ಮೇಲಿನಿಂದ ಕಳುಹಿಸಿ ನನ್ನನ್ನು ಹಿಡಿದು ಬಹಳ ನೀರುಗಳೊಳಗಿಂದ ಎಳೆದನು.
18:17b.PSA.018.017 ಆತನು ನನ್ನನ್ನು ಬಲವುಳ್ಳ ಶತ್ರುವಿ ನಿಂದಲೂ ಹಗೆಮಾಡಿದವನಿಂದಲೂ ಬಿಡಿಸಿದನು; ಅವರು ನನಗಿಂತ ಬಲಿಷ್ಠರಾಗಿದ್ದರು.
18:18b.PSA.018.018 ನನ್ನ ಆಪ ತ್ತಿನ ದಿವಸದಲ್ಲಿ ನನ್ನನ್ನು ಅವರು ಸುತ್ತಿಕೊಂಡರು; ಆದರೆ ಕರ್ತನು ನನ್ನ ಆಧಾರನಾದನು.
18:19b.PSA.018.019 ಆತನು ನನ್ನನ್ನು ವಿಶಾಲಸ್ಥಳಕ್ಕೆ ತಂದು ನನ್ನನ್ನು ತಪ್ಪಿಸಿಬಿಟ್ಟನು. ಯಾಕಂದರೆ ಆತನು ನನ್ನಲ್ಲಿ ಸಂತೋಷಪಟ್ಟನು.
18:20b.PSA.018.020 ಕರ್ತನು ನನ್ನ ನೀತಿಯ ಪ್ರಕಾರ ನನಗೆ ಪ್ರತಿಫಲ ಕೊಟ್ಟನು. ನನ್ನ ಕೈಗಳ ಶುದ್ಧತ್ವದ ಪ್ರಕಾರ ನನಗೆ ಬದಲು ಕೊಟ್ಟನು.
18:21b.PSA.018.021 ನಾನು ಕರ್ತನ ಮಾರ್ಗಗಳನ್ನು ಕೈಕೊಂಡು ನನ್ನ ದೇವರನ್ನು ಬಿಟ್ಟುಹೋಗುವ ದುಷ್ಟತ್ವವನ್ನು ನಾನು ಮಾಡಲಿಲ್ಲ.
18:22b.PSA.018.022 ಆತನ ತೀರ್ಪುಗಳೆಲ್ಲಾ ನನ್ನ ಮುಂದೆ ಇದ್ದವು; ಆತನ ನೇಮಗಳನ್ನು ನನ್ನಿಂದ ತೊಲಗಿಸ ಲಿಲ್ಲ.
18:23b.PSA.018.023 ಆತನ ಮುಂದೆ ಸಂಪೂರ್ಣನಾಗಿದ್ದು ನನ್ನ ಅಕ್ರಮದಿಂದ ನನ್ನನ್ನು ಕಾಪಾಡಿಕೊಂಡೆನು.
18:24b.PSA.018.024 ಆದದ ರಿಂದ ಕರ್ತನು ನನ್ನ ನೀತಿಯ ಪ್ರಕಾರವೂ ಆತನ ಕಣ್ಣೆದುರಿನಲ್ಲಿ ನನ್ನ ಕೈಗಳ ಶುದ್ಧತ್ವದ ಪ್ರಕಾರವೂ ನನಗೆ ಬದಲು ಕೊಟ್ಟನು.
18:25b.PSA.018.025 ನೀನು ಕರುಣೆಯು ಳ್ಳವನಿಗೆ ಕರುಣೆಯನ್ನು ತೋರಿಸುವಿ; ಸಂಪೂರ್ಣ ನಾದ ಮನುಷ್ಯನಿಗೆ ಸಂಪೂರ್ಣನಾಗಿರುವಿ.
18:26b.PSA.018.026 ಶುದ್ಧ ನಿಗೆ ಶುದ್ಧನಾಗಿರುವಿ; ಮೂರ್ಖನಿಗೆ ಮೂರ್ಖನಾಗಿ ರುವಿ.
18:27b.PSA.018.027 ಕುಂದಿಸಿದ ಜನರನ್ನು ನೀನು ರಕ್ಷಿಸುವಿ; ಆದರೆ ನೀನು ಗರ್ವಿಷ್ಟರ ಕಣ್ಣುಗಳನ್ನು ತಗ್ಗಿಸುವಿ.
18:28b.PSA.018.028 ನೀನು ನನ್ನ ದೀಪವನ್ನು ಬೆಳಗಿಸುವಿ; ನನ್ನ ದೇವ ರಾದ ಕರ್ತನು ನನ್ನ ಕತ್ತಲೆಯನ್ನು ಪ್ರಕಾಶಿಸುವಂತೆ ಮಾಡುವನು.
18:29b.PSA.018.029 ನಿನ್ನಿಂದ ನಾನು ದಂಡಿನ ಮೇಲೆ ಬಿದ್ದೆನು; ನನ್ನ ದೇವರಿಂದ ಗೋಡೆ ನೆಗೆದೆನು.
18:30b.PSA.018.030 ದೇವರ ಮಾರ್ಗವಾದರೋ ಸಂಪೂರ್ಣವಾದದ್ದು; ಕರ್ತನ ವಾಕ್ಯವು ಪುಟಕ್ಕೆ ಹಾಕಿದ್ದಾಗಿದೆ; ಆತನು ತನ್ನಲ್ಲಿ ಭರವಸವಿಟ್ಟವರೆಲ್ಲರಿಗೆ ಗುರಾಣಿಯಾಗಿದ್ದಾನೆ.
18:31b.PSA.018.031 ಕರ್ತನಲ್ಲದೆ ದೇವರು ಯಾರು? ಇಲ್ಲವೆ ನಮ್ಮ ದೇವರ ಹೊರತು ಬಂಡೆಯು ಯಾರು?
18:32b.PSA.018.032 ಪರಾ ಕ್ರಮದಿಂದ ನನ್ನ ನಡುವನ್ನು ಕಟ್ಟಿ ನನ್ನ ಮಾರ್ಗವನ್ನು ಸಂಪೂರ್ಣ ಮಾಡುವ ದೇವರು ಆತನೇ.
18:33b.PSA.018.033 ನನ್ನ ಕಾಲುಗಳನ್ನು ಜಿಂಕೆಗಳ ಕಾಲುಗಳಂತೆ ಮಾಡಿ ನನ್ನ ಉನ್ನತ ಸ್ಥಳಗಳ ಮೆಲೆ ನನ್ನನ್ನು ನಿಲ್ಲಿಸುತ್ತಾನೆ.
18:34b.PSA.018.034 ಆತನು ನನ್ನ ಕೈಗಳಿಗೆ ಯುದ್ಧವನ್ನು ಕಲಿಸುತ್ತಾನೆ; ಹೀಗೆ ನನ್ನ ತೋಳುಗಳು ಉಕ್ಕಿನ ಬಿಲ್ಲನ್ನು ಮುರಿಯುತ್ತವೆ.
18:35b.PSA.018.035 ನಿನ್ನ ರಕ್ಷಣೆಯ ಗುರಾಣಿಯನ್ನು ಸಹ ನನಗೆ ನೀನು ಕೊಟ್ಟಿದ್ದೀ; ನಿನ್ನ ಬಲಗೈ ನನ್ನನ್ನು ಹಿಡಿದಿದೆ. ನಿನ್ನ ಸಾತ್ವಿಕತ್ವವು ನನ್ನನ್ನು ಹೆಚ್ಚಿಸಿಯದೆ.
18:36b.PSA.018.036 ನನ್ನ ಹೆಜ್ಜೆಗ ಳನ್ನು ವಿಶಾಲಮಾಡಿ ನನ್ನ ಪಾದಗಳನ್ನು ಎಡವದಂತೆ ಮಾಡಿದ್ದೀ.
18:37b.PSA.018.037 ನನ್ನ ಶತ್ರುಗಳನ್ನು ಹಿಂದಟ್ಟಿ ಹಿಡಿದಿ ದ್ದೇನೆ; ಅವರನ್ನು ಸಂಹರಿಸಿಬಿಡುವ ವರೆಗೆ ನಾನು ಹಿಂತಿರುಗಲಿಲ್ಲ.
18:38b.PSA.018.038 ಅವರು ಏಳಲಾರದ ಹಾಗೆ ಅವ ರಿಗೆ ಗಾಯ ಮಾಡಿದೆನು; ಅವರು ನನ್ನ ಪಾದಗಳ ಕೆಳಗೆ ಬಿದ್ದಿದ್ದಾರೆ.
18:39b.PSA.018.039 ನೀನು ಯುದ್ಧಕಾಗ್ಕಿ ಪರಾ ಕ್ರಮದಿಂದ ನನ್ನ ನಡುವನ್ನು ಕಟ್ಟಿ ನನ್ನ ಎದುರಾಳಿಗ ಳನ್ನು ಅಧೀನ ಮಾಡಿದಿ.
18:40b.PSA.018.040 ನನ್ನ ಹಗೆಯವರನ್ನು ನಾಶಮಾಡುವಂತೆ ಶತ್ರುಗಳ ಕುತ್ತಿಗೆಗಳನ್ನು ನೀನು ನನಗೆ ಕೊಟ್ಟಿದ್ದೀ.
18:41b.PSA.018.041 ಅವರು ಮೊರೆಯಿಟ್ಟರು, ಆದರೆ ರಕ್ಷಿಸುವವರು ಯಾರೂ ಇದ್ದಿಲ್ಲ. ಕರ್ತನಿಗೂ ಮೊರೆ ಇಟ್ಟರು, ಆದರೆ ಅವರಿಗೆ ಆತನು ಉತ್ತರ ಕೊಡ ಲಿಲ್ಲ.
18:42b.PSA.018.042 ಗಾಳಿಯ ಮುಂದಿನ ಧೂಳಿನಹಾಗೆ ಅವ ರನ್ನು ಹೊಡೆದು ಪುಡಿಪುಡಿ ಮಾಡಿದನು; ಬೀದಿಯ ಕೆಸರಿನಹಾಗೆ ಅವರನ್ನು ಹೊರಗೆ ಚೆಲ್ಲಿಬಿಟ್ಟನು.
18:43b.PSA.018.043 ನೀನು ಜನರ ವಿವಾದಗಳಿಂದ ನನ್ನನ್ನು ತಪ್ಪಿಸಿದ್ದೀ; ಅನ್ಯ ಜನಾಂಗಗಳ ತಲೆಯಾಗಿ ನನ್ನನ್ನು ಮಾಡಿದ್ದೀ; ನಾನ ರಿಯದ ಜನರು ನನ್ನನ್ನು ಸೇವಿಸುವರು.
18:44b.PSA.018.044 ನನ್ನ ಮಾತನ್ನು ಕೇಳಿದೊಡನೆ ಅವರು ನನಗೆ ವಿಧೇಯ ರಾಗುವರು.
18:45b.PSA.018.045 ಪರಕೀಯರು ನನಗೆ ಅಧೀನರಾ ಗುವರು ಮತ್ತು ಅವರು ಬಾಡಿಹೋಗುವರು; ತಮ್ಮ ದುರ್ಗಗಳೊಳಗಿಂದ ನಡುಗುತ್ತಾ ಬರುವರು.
18:46b.PSA.018.046 ಕರ್ತನು ಜೀವಿತನಾಗಿದ್ದಾನೆ; ನನ್ನ ಬಂಡೆ ಯಾದಾತನು ಸ್ತುತಿಹೊಂದಲಿ; ನನ್ನ ರಕ್ಷಣೆಯ ದೇವರು ಘನಹೊಂದಲಿ.
18:47b.PSA.018.047 ನನಗೋಸ್ಕರ ಮುಯ್ಯಿಗೆ ಮುಯ್ಯಿತೀರಿಸುವಾತನೂ ಜನರನ್ನು ನನ್ನ ಕೆಳಗೆ ಅಧೀನಮಾಡುವಾತನೂ ದೇವರು ತಾನೇ.
18:48b.PSA.018.048 ನನ್ನ ಶತ್ರುಗಳಿಂದ ನನ್ನನ್ನು ತಪ್ಪಿಸುವನು; ಹೌದು, ನೀನು ನನ್ನ ಎದುರಾಳಿಗಳಿಂದ ತಪ್ಪಿಸಿ ನನ್ನನ್ನು ಮೇಲೆ ಎತ್ತುತ್ತೀ; ಬಲಾತ್ಕಾರ ಮಾಡುವವನಿಂದ ನನ್ನನ್ನು ಬಿಡಿಸಿದ್ದೀ.
18:49b.PSA.018.049 ಆದ್ದರಿಂದ ಓ ಕರ್ತನೇ, ಅನ್ಯಜನಾಂಗ ಗಳಲ್ಲಿ ನಿನಗೆ ಉಪಕಾರಸ್ತುತಿ ಮಾಡುತ್ತೇನೆ. ನಿನ್ನನ್ನು ಕೊಂಡಾಡಿ ನಿನ್ನ ಹೆಸರನ್ನು ಕೀರ್ತಿಸುವೆನು.ಆತನು ತನ್ನ ಅರಸನಿಗೆ ದೊಡ್ಡ ಬಿಡುಗಡೆಯನ್ನು ಕೊಟ್ಟು ತನ್ನ ಅಭಿಷಕ್ತನಾದ ದಾವೀದನಿಗೂ ಅವನ ಸಂತತಿಗೂ ಕೃಪೆಯನ್ನು ಎಂದೆಂದಿಗೂ ತೋರಿಸುತ್ತಾನೆ.
18:50b.PSA.018.050 ಆತನು ತನ್ನ ಅರಸನಿಗೆ ದೊಡ್ಡ ಬಿಡುಗಡೆಯನ್ನು ಕೊಟ್ಟು ತನ್ನ ಅಭಿಷಕ್ತನಾದ ದಾವೀದನಿಗೂ ಅವನ ಸಂತತಿಗೂ ಕೃಪೆಯನ್ನು ಎಂದೆಂದಿಗೂ ತೋರಿಸುತ್ತಾನೆ.
19
19:1b.PSA.019.001 ಆಕಾಶಗಳು ದೇವರ ಮಹಿಮೆಯನ್ನು ಸಾರುತ್ತವೆ; ಅಂತರಿಕ್ಷವು ಆತನ ಕೈ ಕೆಲಸ ವನ್ನು ತೋರಿಸುತ್ತದೆ.
19:2b.PSA.019.002 ದಿನವು ದಿನಕ್ಕೆ ಮಾತನ್ನು ಉಚ್ಚರಿಸುತ್ತದೆ; ರಾತ್ರಿಯು ರಾತ್ರಿಗೆ ತಿಳುವಳಿಕೆಯನ್ನು ಅರುಹುತ್ತದೆ.
19:3b.PSA.019.003 ಮಾತಿಲ್ಲ, ಭಾಷೆಯೂ ಇಲ್ಲ; ಅವುಗಳ ಶಬ್ದವು ಕೇಳುವದಿಲ್ಲ.
19:4b.PSA.019.004 ಭೂಮಿಯ ಮೇಲೆಲ್ಲಾ ಅವು ಗಳ ಪ್ರಭುತ್ವವೂ ಭೂಲೋಕದ ಅಂತ್ಯದ ವರೆಗೆ ಅವುಗಳ ನುಡಿಗಳೂ ಹರಡಿವೆ; ಅವುಗಳಲ್ಲಿ ಆತನು ಸೂರ್ಯನಿಗೆ ಗುಡಾರವನ್ನು ಹಾಕಿದ್ದಾನೆ.
19:5b.PSA.019.005 ಅವನು ಮದಲಿಂಗನ ಹಾಗೆ ತನ್ನ ಕೊಠಡಿಯಿಂದ ಹೊರಟುಬಂದು ಪರಾಕ್ರಮಶಾಲಿಯ ಹಾಗೆ ಓಡಲು ಸಂತೋಷಿಸುತ್ತಾನೆ.
19:6b.PSA.019.006 ಆಕಾಶದ ಅಂತ್ಯದಿಂದ ಹೊರಟು ಅದರ ಅಂತ್ಯಗಳ ವರೆಗೆ ಸುತ್ತುತ್ತಾನೆ; ಅವನ ಬಿಸಿಲಿಗೆ ಮರೆಯಾದದ್ದು ಒಂದೂ ಇಲ್ಲ.
19:7b.PSA.019.007 ಕರ್ತನ ನ್ಯಾಯಪ್ರಮಾಣವು ಸಂಪೂರ್ಣವಾಗಿದ್ದು ಪ್ರಾಣಕ್ಕೆ ಜೀವಕರವಾಗಿದೆ: ಕರ್ತನ ಸಾಕ್ಷಿಯು ಮೂರ್ಖರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.
19:8b.PSA.019.008 ಕರ್ತನ ಕಟ್ಟಳೆಗಳು ನ್ಯಾಯವಾದವುಗಳಾಗಿದ್ದು ಹೃದಯಕ್ಕೆ ಸಂತೋಷಕರವಾಗಿವೆ; ಕರ್ತನ ಆಜ್ಞೆಯು ಶುದ್ಧವಾ ದದ್ದು; ಕಣ್ಣುಗಳನ್ನು ಬೆಳಗಿಸುತ್ತದೆ.
19:9b.PSA.019.009 ಕರ್ತನ ಭಯವು ಪವಿತ್ರವಾಗಿದ್ದು ಎಂದೆಂದಿಗೂ ನೆಲೆಯಾಗಿದೆ. ಕರ್ತನ ನ್ಯಾಯಗಳು ಸತ್ಯವಾಗಿದ್ದು ಒಟ್ಟಾಗಿ ನೀತಿಯುಳ್ಳವುಗ ಳಾಗಿವೆ.
19:10b.PSA.019.010 ಅವು ಬಂಗಾರಕ್ಕಿಂತಲೂ ಬಹಳ ಅಪರಂಜಿ ಗಿಂತಲೂ ಅಪೇಕ್ಷಿಸತಕ್ಕವುಗಳು; ಜೇನಿಗಿಂತಲೂ ಶೋಧಿಸಿದ ಜೇನು ತುಪ್ಪಕ್ಕಿಂತಲೂ ಸಿಹಿಯಾದವು ಗಳು.
19:11b.PSA.019.011 ನಿನ್ನ ಸೇವಕನು ಅವುಗಳಿಂದ ಎಚ್ಚರಿಸಲ್ಪಡು ತ್ತಾನೆ; ಅವುಗಳನ್ನು ಕೈಕೊಳ್ಳುವದರಲ್ಲಿ ದೊಡ್ಡ ಪ್ರತಿ ಫಲ ಉಂಟು.
19:12b.PSA.019.012 ತನ್ನ ತಪ್ಪುಗಳನ್ನು ತಿಳಿದುಕೊಳ್ಳುವವನಾರು? ಗುಪ್ತವಾದ ಪಾಪಗಳಿಂದ ನನ್ನನ್ನು ನಿರ್ಮಲಮಾಡು.
19:13b.PSA.019.013 ಗರ್ವದ ಪಾಪಗಳಿಂದ ನಿನ್ನ ಸೇವಕನನ್ನು ದೂರ ಮಾಡು. ಅವು ನನ್ನನ್ನು ಆಳದೆ ಇರಲಿ; ಆಗ ನಾನು ಸಂಪೂರ್ಣನಾಗಿದ್ದು ಮಹಾದ್ರೋಹದಿಂದ ನಿರಪರಾ ಧಿಯಾಗುವೆನು.ನನ್ನ ಬಲವೂ ನನ್ನ ವಿಮೋಚ ಕನೂ ಆಗಿರುವ ಕರ್ತನೇ, ನನ್ನ ಬಾಯಿಯ ಮಾತು ಗಳೂ ನನ್ನ ಹೃದಯದ ಧ್ಯಾನವೂ ನಿನ್ನ ಮುಂದೆ ಮೆಚ್ಚಿಕೆಯಾಗಿರಲಿ.
19:14b.PSA.019.014 ನನ್ನ ಬಲವೂ ನನ್ನ ವಿಮೋಚ ಕನೂ ಆಗಿರುವ ಕರ್ತನೇ, ನನ್ನ ಬಾಯಿಯ ಮಾತು ಗಳೂ ನನ್ನ ಹೃದಯದ ಧ್ಯಾನವೂ ನಿನ್ನ ಮುಂದೆ ಮೆಚ್ಚಿಕೆಯಾಗಿರಲಿ.
20
20:1b.PSA.020.001 ಕರ್ತನು ಇಕ್ಕಟ್ಟಿನ ದಿವಸದಲ್ಲಿ ನಿನ್ನ ಪ್ರಾರ್ಥನೆಯನ್ನು ಕೇಳಲಿ; ಯಾಕೋಬನ ದೇವರ ಹೆಸರು ನಿನ್ನನ್ನು ಕಾಪಾಡಲಿ.
20:2b.PSA.020.002 ಪರಿಶುದ್ಧ ಸ್ಥಳದೊಳಗಿಂದ ನಿನಗೆ ಸಹಾಯ ಕಳುಹಿಸಲಿ; ಚೀಯೋ ನಿನಿಂದ ನಿನ್ನನ್ನು ಬಲಪಡಿಸಲಿ.
20:3b.PSA.020.003 ನಿನ್ನ ಅರ್ಪಣೆಗಳನ್ನೆಲ್ಲಾ ಜ್ಞಾಪಕಮಾಡಿ ನಿನ್ನ ದಹನಬಲಿಯನ್ನು ಅಂಗೀಕರಿಸಲಿ. ಸೆಲಾ.
20:4b.PSA.020.004 ನಿನ್ನ ಸ್ವಂತ ಹೃದಯದ ಪ್ರಕಾರ ನಿನಗೆ ಕೊಡಲಿ; ನಿನ್ನ ಆಲೋ ಚನೆಯನ್ನೆಲ್ಲಾ ಪೂರೈಸಲಿ.
20:5b.PSA.020.005 ನಾವು ನಿನ್ನ ರಕ್ಷಣೆಯಲ್ಲಿ ಹರ್ಷಿಸಿ ನಮ್ಮ ದೇವರ ಹೆಸರಿನಲ್ಲಿ ಧ್ವಜ ಎತ್ತುವೆವು; ಕರ್ತನು ನಿನ್ನ ಬಿನ್ನಹಗಳನ್ನೆಲ್ಲಾ ಪೂರೈ ಸಲಿ.
20:6b.PSA.020.006 ಕರ್ತನು ತನ್ನ ಅಭಿಷಕ್ತನನ್ನು ರಕ್ಷಿಸುತ್ತಾ ನೆಂದೂ ತನ್ನ ಪರಿಶುದ್ಧ ಪರಲೋಕದೊಳಗಿಂದ ತನ್ನ ಬಲಗೈಯ ರಕ್ಷಣಕರವಾದ ಪರಾಕ್ರಮದಿಂದ ಅವನಿಗೆ ಉತ್ತರ ಕೊಡುವನೆಂದೂ ಈಗ ನಾನು ಬಲ್ಲೆನು.
20:7b.PSA.020.007 ಕೆಲವರು ರಥಗಳಲ್ಲಿಯೂ ಕೆಲವರು ಕುದುರೆಗಳ ಲ್ಲಿಯೂ ಭರವಸವಿಡುತ್ತಾರೆ; ಆದರೆ ನಾವು ನಮ್ಮ ದೇವರಾದ ಕರ್ತನ ಹೆಸರನ್ನು ಜ್ಞಾಪಕಮಾಡುತ್ತೇವೆ.
20:8b.PSA.020.008 ಅವರು ಬೊಗ್ಗಿ ಬೀಳುತ್ತಾರೆ; ಆದರೆ ನಾವು ಎದ್ದು ನಿಂತುಕೊಳ್ಳುತ್ತೇವೆ.ಕರ್ತನೇ, ರಕ್ಷಿಸು; ನಾವು ಕರೆ ಯುವಾಗ ಅರಸನು ನಮಗೆ ಉತ್ತರ ಕೊಡಲಿ.
20:9b.PSA.020.009 ಕರ್ತನೇ, ರಕ್ಷಿಸು; ನಾವು ಕರೆ ಯುವಾಗ ಅರಸನು ನಮಗೆ ಉತ್ತರ ಕೊಡಲಿ.
21
21:1b.PSA.021.001 ಓ ಕರ್ತನೇ, ನಿನ್ನ ಬಲದಲ್ಲಿ ಅರಸನು ಸಂತೋಷಪಡುವನು; ನಿನ್ನ ರಕ್ಷಣೆಯಲ್ಲಿ ಎಷ್ಟೋ ಅಧಿಕವಾಗಿ ಉಲ್ಲಾಸಪಡುವನು.
21:2b.PSA.021.002 ಅವನ ಹೃದಯದ ಆಶೆಯನ್ನು ನೀನು ಅವನಿಗೆ ಪೂರೈಸಿ ಅವನ ತುಟಿಗಳ ಬಿನ್ನಹವನ್ನು ತಡೆಯಲಿಲ್ಲ. ಸೆಲಾ.
21:3b.PSA.021.003 ಒಳ್ಳೇತನದ ಆಶೀರ್ವಾದಗಳೊಂದಿಗೆ ಅವನನ್ನು ಎದುರುಗೊಂಡು ಅಪರಂಜಿಯ ಕಿರೀಟವನ್ನು ಅವನ ತಲೆಗೆ ಇಡುತ್ತೀ.
21:4b.PSA.021.004 ಜೀವವನ್ನು ಅವನು ನಿನ್ನಿಂದ ಬೇಡಲು ನೀನು ಅವನಿಗೆ ಯುಗಯುಗಾಂತರಗಳಿಗೂ ದೀರ್ಘಾಯುಷ್ಯವನ್ನು ಕೊಟ್ಟೆ.
21:5b.PSA.021.005 ನ್ನ ರಕ್ಷಣೆಯಲ್ಲಿ ಅವನ ಹೆಚ್ಚಳವು ದೊಡ್ಡದಾಗಿದೆ, ಗೌರವವನ್ನೂ ಘನತೆಯನ್ನೂ ಅವನ ಮೇಲೆ ಇಡುತ್ತೀ.
21:6b.PSA.021.006 ನೀನು ಎಂದೆಂದಿಗೂ ಅವನನ್ನು ಅಧಿಕವಾಗಿ ಆಶೀರ್ವಾದ ಮಾಡಿದ್ದೀ. ನಿನ್ನ ಮುಖದ ಮುಂದೆ ಅವನನ್ನು ಅಧಿಕ ವಾಗಿ ಸಂತೋಷಪಡುವಂತೆ ಮಾಡಿದ್ದೀ.
21:7b.PSA.021.007 ಅರಸನು ಕರ್ತನಲ್ಲಿ ಭರವಸವಿಡುತ್ತಾನೆ; ಮಹೋನ್ನತನ ಕೃಪೆ ಯಿಂದ ಅವನು ಕದಲದೆ ಇರುವನು.
21:8b.PSA.021.008 ನಿನ್ನ ಶತ್ರು ಗಳೆಲ್ಲಾ ನಿನ್ನ ಕೈಗೆ ಸಿಕ್ಕುವರು; ನಿನ್ನ ಬಲಗೈಗೆ ನಿನ್ನನ್ನು ಹಗೆಮಾಡುವವರು ಸಿಕ್ಕುವರು.
21:9b.PSA.021.009 ನೀನು ಕೋಪಿಸುವ ಕಾಲದಲ್ಲಿ ಅವರನ್ನು ಬೆಂಕಿಯ ಒಲೆಯ ಹಾಗೆ ಮಾಡುವಿ; ಕರ್ತನು ತನ್ನ ಕೋಪದಿಂದ ಅವರನ್ನು ನುಂಗಿಬಿಡುವನು; ಬೆಂಕಿಯು ಅವರನ್ನು ದಹಿಸಿ ಬಿಡು ವದು.
21:10b.PSA.021.010 ನೀನು ಅವರ ಫಲವನ್ನು ಭೂಮಿಯೊಳ ಗಿಂದಲೂ ಅವರ ಸಂತತಿಯನ್ನು ಮನುಷ್ಯನ ಮಕ್ಕ ಳೊಳಗಿಂದಲೂ ನಾಶಮಾಡುವಿ.
21:11b.PSA.021.011 ಅವರು ನಿನಗೆ ವಿರೋಧವಾಗಿ ಕೇಡನ್ನು ಯತ್ನಿಸಿದರು; ಪೂರೈಸಲಾ ರದ ಯುಕ್ತಿಯನ್ನು ಕಲ್ಪಿಸಿದರು.
21:12b.PSA.021.012 ನೀನು ಅವರನ್ನು ಬೆನ್ನು ತಿರಿಗಿಸುವಂತೆ ಮಾಡುವಿ: ಅವರ ಮುಖಕ್ಕೆ ಎದುರಾಗಿ ನಿನ್ನ ಬಿಲ್ಲನೂ ಹಗ್ಗಗಳಲ್ಲಿ ಹೂಡುವಿ.ಕರ್ತನೇ, ನಿನ್ನ ಸ್ವಂತ ಬಲದಿಂದ ನೀನು ಘನ ಹೊಂದಿದವನಾಗು; ಹೀಗೆ ನಾವು ನಿನ್ನ ಪರಾಕ್ರಮ ವನ್ನು ಹಾಡಿ ಕೀರ್ತಿಸುವೆವು.
21:13b.PSA.021.013 ಕರ್ತನೇ, ನಿನ್ನ ಸ್ವಂತ ಬಲದಿಂದ ನೀನು ಘನ ಹೊಂದಿದವನಾಗು; ಹೀಗೆ ನಾವು ನಿನ್ನ ಪರಾಕ್ರಮ ವನ್ನು ಹಾಡಿ ಕೀರ್ತಿಸುವೆವು.
22
22:1b.PSA.022.001 ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಯಾಕೆ ನನಗೆ ಸಹಾಯ ಮಾಡದೆಯೂ ನನ್ನ ಕೂಗಿಗೆ ಕಿವಿ ಗೊಡದೆಯೂ ದೂರವಾಗಿದ್ದೀ.
22:2b.PSA.022.002 ಓ ನನ್ನ ದೇವರೇ, ಹಗಲಿನಲ್ಲಿ ಕರೆಯುತ್ತೇನೆ; ನೀನು ಉತ್ತರ ಕೊಡುವದಿಲ್ಲ; ರಾತ್ರಿಯಲ್ಲಿಯೂ ನಾನು ಮೌನವಾಗಿರು ವದಿಲ್ಲ.
22:3b.PSA.022.003 ಆದರೆ ನೀನು ಪರಿಶುದ್ಧನಾಗಿದ್ದೀ; ನೀನು ಇಸ್ರಾಯೇಲಿನ ಸ್ತೋತ್ರಗಳಲ್ಲಿ ವಾಸ ಮಾಡುವಾ ತನು.
22:4b.PSA.022.004 ನಿನ್ನಲ್ಲಿ ನಮ್ಮ ಪಿತೃಗಳು ಭರವಸವಿಟ್ಟರು; ಅವರು ಭರವಸವಿಟ್ಟದ್ದರಿಂದ ನೀನು ಅವರನ್ನು ತಪ್ಪಿ ಸಿದಿ.
22:5b.PSA.022.005 ನಿನಗೆ ಅವರು ಮೊರೆ ಇಟ್ಟದ್ದರಿಂದ ತಪ್ಪಿಸ ಲ್ಪಟ್ಟರು; ನಿನ್ನಲ್ಲಿ ಭರವಸವಿಟ್ಟದ್ದರಿಂದ ಅವರು ನಾಚಿಕೆ ಪಡಲಿಲ್ಲ.
22:6b.PSA.022.006 ನಾನು ಹುಳವೇ, ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟವನೂ ಜನರಿಂದ ತಿರಸ್ಕರಿಸಲ್ಪಟ್ಟವನೂ ಆಗಿದ್ದೇನೆ.
22:7b.PSA.022.007 ನನ್ನನ್ನು ನೋಡುವವರೆಲ್ಲರು ನನ್ನನ್ನು ಗೇಲಿ ಮಾಡಿ ನಗುವರು, ಅವರು ತುಟಿ ಅಗಲಮಾಡಿ ತಲೆ ಆಡಿಸುತ್ತಾ--
22:8b.PSA.022.008 ಆತನು ಕರ್ತನ ಮೇಲೆ ಭರವಸ ವಿಟ್ಟಿದ್ದಾನಲ್ಲಾ; ಆತನು ಅವನನ್ನು ತಪ್ಪಿಸಿ ಅವನನ್ನು ಬಿಡಿಸಲಿ; ಆತನು ಅವನಲ್ಲಿ ಸಂತೋಷಪಡುತ್ತಾ ನಲ್ಲಾ ಅನ್ನುತ್ತಾರೆ.
22:9b.PSA.022.009 ಆದರೆ ನೀನು ಗರ್ಭದಿಂದ ನನ್ನನ್ನು ತೆಗೆದಿ; ನನ್ನ ತಾಯಿಯ ಎದೆಯಲ್ಲಿದ್ದಾಗ ನಾನು ನಿರೀಕ್ಷಿಸುವಂತೆ ಮಾಡಿದಿ.
22:10b.PSA.022.010 ಹುಟ್ಟಿದಂದಿನಿಂದ ನೀನೇ ನನಗೆ ಆಧಾರ; ನನ್ನ ತಾಯಿಯ ಹೊಟ್ಟೆಯಿಂದ ನನ್ನನ್ನು ಬರಮಾಡಿದ ನನ್ನ ದೇವರು ನೀನೇ ಆಗಿದ್ದೀ.
22:11b.PSA.022.011 ನನ್ನಿಂದ ದೂರವಾಗಿರಬೇಡ; ಇಕ್ಕಟ್ಟು ಸವಿಾಪ ವಾಗಿದೆ; ನನಗೆ ಸಹಾಯಕನು ಯಾರೂ ಇಲ್ಲ.
22:12b.PSA.022.012 ಬಹಳ ಹೋರಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವಾದ ಹೋರಿಗಳು ನನ್ನನ್ನು ಮುತ್ತಿ ಕೊಂಡಿವೆ.
22:13b.PSA.022.013 ಹರಿದು ಬಿಡುವಂಥ ಗರ್ಜಿಸುವ ಸಿಂಹದ ಹಾಗೆ ನನ್ನ ಮೇಲೆ ತಮ್ಮ ಬಾಯಿ ತೆರೆದಿ ದ್ದಾರೆ.
22:14b.PSA.022.014 ನಾನು ನೀರಿನ ಹಾಗೆ ಹೊಯ್ಯಲ್ಪಟ್ಟಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿವೆ; ನನ್ನ ಹೃದ ಯವು ಮೇಣದ ಹಾಗೆ ನನ್ನ ಕರುಳುಗಳ ಮಧ್ಯದಲ್ಲಿ ಕರಗಿಹೋಗಿದೆ.
22:15b.PSA.022.015 ನನ್ನ ಶಕ್ತಿ ಬೋಕಿಯ ಹಾಗೆ ಒಣಗಿ ಹೋಗಿದೆ; ನನ್ನ ನಾಲಿಗೆ ಅಂಗಳಕ್ಕೆ ಹತ್ತುತ್ತದೆ; ಮರಣದ ಧೂಳಿಗೆ ನನ್ನನ್ನು ಬರಮಾಡಿದಿ.
22:16b.PSA.022.016 ನಾಯಿ ಗಳು ನನ್ನನ್ನು ಸುತ್ತಿಕೊಂಡಿವೆ; ದುರ್ಮಾರ್ಗಿಗಳ ಸಭೆಯು ನನ್ನನ್ನು ಮುತ್ತಿಕೊಂಡಿದೆ; ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ.
22:17b.PSA.022.017 ನನ್ನ ಎಲು ಬುಗಳನ್ನೆಲ್ಲಾ ಎಣಿಸುತ್ತೇನೆ; ಅವರು ನನ್ನನ್ನು ದೃಷ್ಟಿಸಿ ನೋಡುತ್ತಾರೆ.
22:18b.PSA.022.018 ನನ್ನ ವಸ್ತ್ರಗಳನ್ನು ತಮ್ಮಲ್ಲಿ ಪಾಲು ಮಾಡಿಕೊಳ್ಳುತ್ತಾರೆ. ನನ್ನ ಅಂಗಿಗೋಸ್ಕರ ಚೀಟು ಹಾಕುತ್ತಾರೆ.
22:19b.PSA.022.019 ಆದರೆ ಓ ಕರ್ತನೇ, ನೀನು ನನ್ನಿಂದ ದೂರವಾಗಿರಬೇಡ; ಓ ನನ್ನ ಬಲವೇ, ನನ್ನ ಸಹಾಯಕ್ಕೆ ತ್ವರೆಪಡು.
22:20b.PSA.022.020 ನನ್ನ ಪ್ರಾಣವನ್ನು ಕತ್ತಿಯಿಂದಲೂ ನನಗೆ ಪ್ರಿಯವಾದದ್ದನ್ನು ನಾಯಿಯ ಬಲದಿಂದಲೂ ಬಿಡಿಸು.
22:21b.PSA.022.021 ನನ್ನನ್ನು ಸಿಂಹದ ಬಾಯಿಂದ ರಕ್ಷಿಸು; ನನ್ನನ್ನು ಕಾಡುಕೋಣಗಳ ಕೊಂಬುಗಳಿಂದ ತಪ್ಪಿಸಿ ಉತ್ತರ ಕೊಟ್ಟೆಯಲ್ಲಾ.
22:22b.PSA.022.022 ನಾನು ನಿನ್ನ ಹೆಸರನ್ನು ನನ್ನ ಸಹೋದರರಿಗೆ ಸಾರುವೆನು; ಕೂಟದ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು.
22:23b.PSA.022.023 ಕರ್ತನಿಗೆ ಭಯಪಡುವವರೇ, ಆತನನ್ನು ಸ್ತುತಿಸಿರಿ; ಯಾಕೋಬಿನ ಎಲ್ಲಾ ಸಂತಾನದವರೇ, ಆತನನ್ನು ಘನಪಡಿಸಿರಿ; ಇಸ್ರಾಯೇಲಿನ ಎಲ್ಲಾ ಸಂತಾನದವರೇ, ಆತನಿಗೆ ಭಯಪಡಿರಿ.
22:24b.PSA.022.024 ಸಂಕಟ ಪಡುವವನ ಸಂಕಟ ವನ್ನು ಆತನು ತಿರಸ್ಕರಿಸಲಿಲ್ಲ, ಅಸಹ್ಯಿಸಲಿಲ್ಲ; ತನ್ನ ಮುಖವನ್ನು ಅವನಿಂದ ಮರೆಮಾಡಲಿಲ್ಲ; ಆದರೆ ಅವನು ಮೊರೆಯಿಡಲು ಆತನು ಕೇಳಿದನು.
22:25b.PSA.022.025 ಮಹಾ ಸಭೆಯಲ್ಲಿ ನಿನ್ನನ್ನು ಕುರಿತು ನನ್ನ ಸ್ತೋತ್ರವು ನಿನಗಿ ರುವದು; ನನ್ನ ಪ್ರಮಾಣಗಳನ್ನು ಆತನಿಗೆ ಭಯಪಡು ವವರ ಮುಂದೆ ಸಲ್ಲಿಸುವೆನು.
22:26b.PSA.022.026 ದೀನರು ಉಂಡು ತೃಪ್ತಿಯಾಗುವರು; ಕರ್ತನನ್ನು ಹುಡುಕುವವರು ಆತನನ್ನು ಸ್ತುತಿಸುವರು; ನಿಮ್ಮ ಹೃದಯವು ಎಂದೆಂದಿಗೂ ಬದುಕುವದು.
22:27b.PSA.022.027 ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು.
22:28b.PSA.022.028 ರಾಜ್ಯವು ಕರ್ತನದೇ; ಜನಾಂಗಗಳಲ್ಲಿ ಆಳುವಾತನು ಆತನೇ.
22:29b.PSA.022.029 ಭೂಮಿಯ ಪುಷ್ಟರೆಲ್ಲರೂ ಉಂಡು ಆರಾಧಿಸುವರು; ತಮ್ಮ ಪ್ರಾಣವನ್ನು ಬದುಕಿಸಲಾರದೆ ಧೂಳಿನಲ್ಲಿ ಇಳಿಯುವವರೆಲ್ಲರೂ ಆತನ ಮುಂದೆ ಅಡ್ಡಬೀಳುವರು.
22:30b.PSA.022.030 ಒಂದು ಸಂತಾನವು ಆತನನ್ನು ಸೇವಿಸುವದು. ಅದು ಕರ್ತನ ಸಂತತಿ ಎಂದು ಎಣಿಸ ಲ್ಪಡುವದು.ಅವರು ಬಂದು ಆತನೇ ಇದನ್ನು ಮಾಡಿದ್ದಾನೆಂದೂ ಆತನ ನೀತಿಯನ್ನೂ ಹುಟ್ಟಲಿರುವ ಜನರಿಗೆ ತಿಳಿಸುವರು.
22:31b.PSA.022.031 ಅವರು ಬಂದು ಆತನೇ ಇದನ್ನು ಮಾಡಿದ್ದಾನೆಂದೂ ಆತನ ನೀತಿಯನ್ನೂ ಹುಟ್ಟಲಿರುವ ಜನರಿಗೆ ತಿಳಿಸುವರು.
23
23:1b.PSA.023.001 ಕರ್ತನು ನನ್ನ ಕುರುಬನು; ಕೊರತೆಪಡೆನು.
23:2b.PSA.023.002 ಆತನು ಹಸರುಗಾವಲುಗಳಲ್ಲಿ ನನ್ನನ್ನು ತಂಗುವಂತೆ ಮಾಡುತ್ತಾನೆ. ಶಾಂತವಾದ ನೀರುಗಳ ಪಕ್ಕದಲ್ಲಿ ನನ್ನನ್ನು ನಡಿಸುತ್ತಾನೆ.
23:3b.PSA.023.003 ನನ್ನ ಪ್ರಾಣವನ್ನು ಪುನರ್ಜೀವಿಸ ಮಾಡುತ್ತಾನೆ. ನೀತಿಯ ದಾರಿಗಳಲ್ಲಿ ತನ್ನ ಹೆಸರಿನ ನಿಮಿತ್ತ ನನ್ನನ್ನು ನಡಿಸುತ್ತಾನೆ.
23:4b.PSA.023.004 ಹೌದು, ನಾನು ಮರಣದ ನೆರಳಿನ ಕಣಿವೆಯಲ್ಲಿ ನಡೆದರೂ ಕೇಡಿಗೆ ಭಯಪಡೆನು; ಯಾಕಂದರೆ ನೀನು ನನ್ನ ಸಂಗಡ ಇದ್ದೀ; ನಿನ್ನ ಕೋಲೂ ದೊಣ್ಣೆಯೂ ನನ್ನನ್ನು ಆದರಿಸುತ್ತವೆ.
23:5b.PSA.023.005 ನನ್ನ ವೈರಿಗಳ ಎದುರಿನಲ್ಲಿ ನನ್ನ ಮುಂದೆ ಮೇಜನ್ನು ಸಿದ್ಧಮಾಡುತ್ತೀ; ನೀನು ನನ್ನ ತಲೆಯನ್ನು ಎಣ್ಣೆಯಿಂದ ಅಭಿಷೇಕಿಸುತ್ತೀ; ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.ನಿಶ್ಚಯವಾಗಿ ಒಳ್ಳೇತನವೂ ಕರುಣೆಯೂ ನನ್ನ ಜೀವನದ ದಿವಸ ಗಳಲ್ಲೆಲ್ಲಾ ನನ್ನನ್ನು ಹಿಂಬಾಲಿಸುವವು; ನಾನು ಕರ್ತನ ಮನೆಯಲ್ಲಿ ಎಂದೆಂದಿಗೂ ವಾಸಮಾಡುವೆನು.
23:6b.PSA.023.006 ನಿಶ್ಚಯವಾಗಿ ಒಳ್ಳೇತನವೂ ಕರುಣೆಯೂ ನನ್ನ ಜೀವನದ ದಿವಸ ಗಳಲ್ಲೆಲ್ಲಾ ನನ್ನನ್ನು ಹಿಂಬಾಲಿಸುವವು; ನಾನು ಕರ್ತನ ಮನೆಯಲ್ಲಿ ಎಂದೆಂದಿಗೂ ವಾಸಮಾಡುವೆನು.
24
24:1b.PSA.024.001 ಭೂಮಿಯೂ ಅದರ ಸಮಸ್ತವೂ ಭೂಲೋಕವೂ ಅದರಲ್ಲಿ ವಾಸಿಸುವವುಗಳೂ ಕರ್ತನವುಗಳು.
24:2b.PSA.024.002 ಆತನು ಅದನ್ನು ಸಮುದ್ರಗಳ ಮೇಲೆ ಸ್ಥಾಪಿಸಿ ಪ್ರವಾಹಗಳ ಮೇಲೆ ಅದನ್ನು ಸ್ಥಿರ ಪಡಿಸಿದ್ದಾನೆ.
24:3b.PSA.024.003 ಕರ್ತನ ಪರ್ವತವನ್ನು ಹತ್ತುವವನು ಯಾರು? ಇಲ್ಲವೆ ಆತನ ಪರಿಶುದ್ಧ ಸ್ಥಳದಲ್ಲಿ ನಿಲ್ಲುವವನು ಯಾರು?
24:4b.PSA.024.004 ಶುದ್ಧ ಹಸ್ತಗಳೂ ನಿರ್ಮಲವಾದ ಹೃದ ಯವೂ ಉಳ್ಳವನಾಗಿದ್ದು ತನ್ನ ಪ್ರಾಣವನ್ನು ವ್ಯರ್ಥ ತ್ವಕ್ಕೆ ಎತ್ತದೆಯೂ ಇಲ್ಲವೆ ಮೋಸದಿಂದ ಆಣೆ ಇಡ ದೆಯೂ ಇರುವವನೇ.
24:5b.PSA.024.005 ಅವನೇ ಕರ್ತನ ಕಡೆಯಿಂದ ಆಶೀರ್ವಾದವನ್ನೂ ತನ್ನ ರಕ್ಷಕನಾದ ದೇವರಿಂದ ನೀತಿ ಯನ್ನೂ ಹೊಂದುವನು.
24:6b.PSA.024.006 ಆತನನ್ನು ಹುಡುಕುವ ಸಂತತಿಯು ಇದೇ; ಓ ಯಾಕೋಬ್ಯರ ದೇವರೇ, ನಿನ್ನ ಸನ್ನಿಧಿಯನ್ನು ಹುಡುಕುವವರು ಇಂಥವರೇ. ಸೆಲಾ.
24:7b.PSA.024.007 ಬಾಗಲುಗಳೇ, ನಿಮ್ಮ ತಲೆಗಳನ್ನು ಎತ್ತಿರಿ; ನಿತ್ಯ ದ್ವಾರಗಳೇ, ಎತ್ತಲ್ಪಡಿರಿ; ಮಹಿಮೆಯುಳ್ಳ ಅರಸನು ಒಳಗೆ ಬರುತ್ತಾನೆ.
24:8b.PSA.024.008 ಈ ಮಹಿಮೆಯ ಅರಸನು ಯಾರು? ಬಲವೂ ಪರಾಕ್ರಮವೂ ಉಳ್ಳ ಕರ್ತನು; ಯುದ್ಧದಲ್ಲಿ ಪರಾಕ್ರಮವುಳ್ಳ ಕರ್ತನು.
24:9b.PSA.024.009 ಬಾಗಲುಗಳೇ, ನಿಮ್ಮ ತಲೆಗಳನ್ನೆತ್ತಿರಿ; ನಿತ್ಯದ್ವಾರ ಗಳೇ, ಅವುಗಳನ್ನು ಎತ್ತಿರಿ; ಮಹಿಮೆಯ ಅರಸನು ಒಳಗೆ ಬರುತ್ತಾನೆ.ಮಹಿಮೆಯ ಅರಸನಾದ ಈತನು ಯಾರು? ಸೈನ್ಯಗಳ ಕರ್ತನು, ಈತನೇ ಮಹಿಮೆಯ ಅರಸನು--ಸೆಲಾ.
24:10b.PSA.024.010 ಮಹಿಮೆಯ ಅರಸನಾದ ಈತನು ಯಾರು? ಸೈನ್ಯಗಳ ಕರ್ತನು, ಈತನೇ ಮಹಿಮೆಯ ಅರಸನು--ಸೆಲಾ.
25
25:1b.PSA.025.001 ಓ ಕರ್ತನೇ, ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ.
25:2b.PSA.025.002 ಓ ನನ್ನ ದೇವರೇ, ನಾನು ನಿನ್ನಲ್ಲಿ ಭರವಸೆ ಇಡುತ್ತೇನೆ; ನಾನು ಆಶಾಭಂಗ ಪಡದಂತೆಮಾಡು; ನನ್ನ ಶತ್ರುಗಳು ನನ್ನ ಮೇಲೆ ಜಯೋತ್ಸಾಹ ಮಾಡದಿರಲಿ.
25:3b.PSA.025.003 ನಿನ್ನನ್ನು ನಿರೀಕ್ಷಿಸು ವವರಲ್ಲಿ ಯಾರೂ ಆಶಾಭಂಗಪಡದಿರಲಿ; ನಿಷ್ಕಾರಣ ವಾಗಿ ದ್ರೋಹ ಮಾಡುವವರು ನಾಚಿಕೆಗೊಳ್ಳಲಿ.
25:4b.PSA.025.004 ಓ ಕರ್ತನೇ, ನಿನ್ನ ಮಾರ್ಗಗಳನ್ನು ನನಗೆ ತೋರಿ ಸು; ನಿನ್ನ ದಾರಿಗಳನ್ನು ನನಗೆ ಕಲಿಸು.
25:5b.PSA.025.005 ನಿನ್ನ ಸತ್ಯದಲ್ಲಿ ನನ್ನನ್ನು ನಡಿಸಿ ನನಗೆ ಕಲಿಸು; ನೀನು ನನ್ನ ರಕ್ಷಣೆಯ ದೇವರಾಗಿದ್ದೀ; ನಾನು ದಿನವೆಲ್ಲಾ ನಿನ್ನನ್ನು ನಿರೀಕ್ಷಿಸು ತ್ತೇನೆ.
25:6b.PSA.025.006 ಓ ಕರ್ತನೇ, ನಿನ್ನ ಅಂತಃಕರಣಗಳನ್ನೂ ನಿನ್ನ ಪ್ರೀತಿಯ ದಯೆಯನ್ನೂ ಜ್ಞಾಪಕಮಾಡಿಕೋ; ಅವು ಆದಿಯಿಂದ ಇದ್ದವುಗಳು.
25:7b.PSA.025.007 ಓ ಕರ್ತನೇ, ನನ್ನ ಯೌವನದ ಪಾಪಗಳನ್ನೂ ದ್ರೋಹಗಳನ್ನೂ ಜ್ಞಾಪಕ ಮಾಡಿಕೊಳ್ಳದೆ ನಿನ್ನ ಕರುಣೆಯ ಪ್ರಕಾರ ನಿನ್ನ ಒಳ್ಳೇ ತನದ ನಿಮಿತ್ತ ನೀನು ನನ್ನನ್ನು ಜ್ಞಾಪಕ ಮಾಡಿಕೋ.
25:8b.PSA.025.008 ಕರ್ತನು ಒಳ್ಳೆಯವನೂ ನ್ಯಾಯವುಳ್ಳವನೂ ಆಗಿ ದ್ದಾನೆ; ಆದದರಿಂದ ಆತನು ಪಾಪದ ಮಾರ್ಗದಲ್ಲಿ ಇರುವವರಿಗೆ ಬೋಧಿಸುವನು.
25:9b.PSA.025.009 ದೀನರನ್ನು ನ್ಯಾಯ ದಲ್ಲಿ ನಡಿಸಿ ಅವರಿಗೆ ತನ್ನ ಮಾರ್ಗವನ್ನು ಕಲಿಸುವನು.
25:10b.PSA.025.010 ಆತನ ಒಡಂಬಡಿಕೆಯನ್ನೂ ಸಾಕ್ಷಿಗಳನ್ನೂ ಕೈಕೊಳ್ಳು ವವರಿಗೆ ಕರ್ತನ ದಾರಿಗಳೆಲ್ಲಾ ಕರುಣೆಯೂ ಸತ್ಯವೂ ಉಳ್ಳವು.
25:11b.PSA.025.011 ಓ ಕರ್ತನೇ, ನನ್ನ ಅಕ್ರಮವು ಬಹಳ ವಾಗಿದೆ. ನಿನ್ನ ಹೆಸರಿನ ನಿಮಿತ್ತ ಅದನ್ನು ಮನ್ನಿಸು;
25:12b.PSA.025.012 ಕರ್ತನಿಗೆ ಭಯಪಡುವ ಮನುಷ್ಯನು ಯಾರು? ಅವನು ಆದು ಕೊಳ್ಳುವ ಮಾರ್ಗದಲ್ಲಿ ಆತನು ಅವನಿಗೆ ಬೋಧಿಸುವನು.
25:13b.PSA.025.013 ಅವನ ಪ್ರಾಣವು ಸುಖದಲ್ಲಿ ಉಳುಕೊಳ್ಳುವದು; ಅವನ ಸಂತಾನವು ದೇಶವನ್ನು ಸ್ವಾಧೀನಮಾಡಿಕೊಳ್ಳುವದು.
25:14b.PSA.025.014 ಕರ್ತನ ಗುಟ್ಟು ಆತ ನಿಗೆ ಭಯಪಡುವವರೊಂದಿಗೆ ಅದೆ; ತನ್ನ ಒಡಂಬಡಿಕೆ ಯನ್ನು ಆತನು ಅವರಿಗೆ ತಿಳಿಸುವನು.
25:15b.PSA.025.015 ನನ್ನ ಕಣ್ಣುಗಳು ಯಾವಾಗಲೂ ಕರ್ತನ ಕಡೆಗೆ ಅವೆ; ಆತನೇ ನನ್ನ ಪಾದಗಳನ್ನು ಬಲೆಯಿಂದ ಹೊರಗೆ ಬರಮಾಡುವನು.
25:16b.PSA.025.016 ನೀನು ನನ್ನ ಕಡೆಗೆ ತಿರುಗಿ ನನ್ನ ಮೇಲೆ ಕರುಣೆಯಿಡು; ನಾನು ಒಂಟಿಗ ನಾಗಿಯೂ ಬಾಧೆಪಡುವವನಾಗಿಯೂ ಇದ್ದೇನೆ.
25:17b.PSA.025.017 ನನ್ನ ಮನೋವ್ಯಥೆಗಳು ಹೆಚ್ಚಾಗಿವೆ; ನೀನು ನನ್ನ ಸಂಕಟಗಳೊಳಗಿಂದ ನನ್ನನ್ನು ಹೊರಗೆ ಬರಮಾಡು.
25:18b.PSA.025.018 ನನ್ನ ಸಂಕಟವನ್ನೂ ನೋವನ್ನೂ ನೋಡು; ನನ್ನ ಪಾಪಗಳನ್ನೆಲ್ಲಾ ಕ್ಷಮಿಸು.
25:19b.PSA.025.019 ನನ್ನ ಶತ್ರುಗಳನ್ನು ನೋಡು, ಅವರು ಹೆಚ್ಚಾಗಿದ್ದಾರೆ; ಕ್ರೂರವಾದ ಹಗೆ ಯಿಂದ ಅವರು ನನ್ನನ್ನು ಹಗೆಮಾಡುತ್ತಾರೆ.
25:20b.PSA.025.020 ಹಾ, ನನ್ನ ಪ್ರಾಣವನ್ನು ಕಾಪಾಡಿ ನನ್ನನ್ನು ಬಿಡಿಸು; ನಾನು ಆಶಾಭಂಗಪಡದಂತೆ ಮಾಡು; ನಾನು ನಿನ್ನಲ್ಲಿ ಭರವಸ ವಿಟ್ಟಿದ್ದೇನೆ.
25:21b.PSA.025.021 ಯಥಾರ್ಥತೆಯೂ ನಿರ್ಮಲತೆಯೂ ನನ್ನನ್ನು ಕಾಯಲಿ; ನಿನ್ನನ್ನು ನಿರೀಕ್ಷಿಸುತ್ತೇನೆ.ಓ ದೇವರೇ, ಇಸ್ರಾಯೇಲ್ಯರನ್ನು ಅವರ ಎಲ್ಲಾ ಭಾದೆ ಗಳೊಳಗಿಂದ ವಿಮೋಚಿಸು.
25:22b.PSA.025.022 ಓ ದೇವರೇ, ಇಸ್ರಾಯೇಲ್ಯರನ್ನು ಅವರ ಎಲ್ಲಾ ಭಾದೆ ಗಳೊಳಗಿಂದ ವಿಮೋಚಿಸು.
26
26:1b.PSA.026.001 ಓ ಕರ್ತನೇ, ನನಗೆ ನ್ಯಾಯತೀರಿಸು; ಯಾಕಂದರೆ ನಾನು ನನ್ನ ಯಥಾರ್ಥತ್ವ ದಲ್ಲಿ ನಡೆದುಕೊಂಡಿದ್ದೇನೆ. ನಾನು ಕರ್ತನಲ್ಲಿ ಭರ ವಸವಿಟ್ಟಿದ್ದೇನೆ; ನಾನು ಕದಲುವದಿಲ್ಲ.
26:2b.PSA.026.002 ಓ ಕರ್ತನೇ ನನ್ನನ್ನು ಶೋಧಿಸಿ ಪರೀಕ್ಷಿಸು; ನನ್ನ ಅಂತರಿಂದ್ರಿ ಯಗಳನ್ನೂ ಹೃದಯವನ್ನೂ ಶೋಧಿಸು.
26:3b.PSA.026.003 ನಿನ್ನ ಪ್ರೀತಿಯೂ ಕೃಪೆಯೂ ನನ್ನ ಕಣ್ಣುಗಳ ಮುಂದೆ ಅವೆ; ನಾನು ನಿನ್ನ ಸತ್ಯದಲ್ಲಿ ನಡೆದುಕೊಂಡಿದ್ದೇನೆ.
26:4b.PSA.026.004 ನಿಷ್ಪ್ರಯೋಜಕರೊಂದಿಗೆ ನಾನು ಕೂತುಕೊಳ್ಳ ಲಿಲ್ಲ; ವಂಚಕರ ಸಂಗಡ ನಾನು ಹೋಗುವದಿಲ್ಲ.
26:5b.PSA.026.005 ದುರ್ಮಾರ್ಗಿಗಳ ಸಭೆಯನ್ನು ಹಗೆಮಾಡಿದ್ದೇನೆ; ದುಷ್ಟರ ಸಂಗಡ ಕೂತುಕೊಳ್ಳುವದಿಲ್ಲ.
26:6b.PSA.026.006 ಓ ಕರ್ತನೇ, ಸ್ತೋತ್ರದ ಶಬ್ದದಿಂದ ಪ್ರಕಟಿಸಿ ನಿನ್ನ ಅದ್ಭುತಗಳ ನ್ನೆಲ್ಲಾ ತಿಳಿಸುವ ಹಾಗೆ
26:7b.PSA.026.007 ನನ್ನ ಕೈಗಳನ್ನು ನಿರ್ಮಲ ತ್ವದಲ್ಲಿ ತೊಳೆದು, ನಿನ್ನ ಬಲಿಪೀಠವನ್ನು ಸುತ್ತುವೆನು.
26:8b.PSA.026.008 ಕರ್ತನೇ, ನಿನ್ನ ವಾಸಸ್ಥಾನವನ್ನೂ ಗೌರವದ ನಿವಾಸವನ್ನೂ ನಾನು ಪ್ರೀತಿಸಿದ್ದೇನೆ.
26:9b.PSA.026.009 ಪಾಪಾತ್ಮರ ಸಂಗಡ ನನ್ನ ಪ್ರಾಣವನ್ನೂ ರಕ್ತ ಸುರಿಸುವವರ ಸಂಗಡ ನನ್ನ ಜೀವವನ್ನೂ ತೆಗೆಯಬೇಡ.
26:10b.PSA.026.010 ಅವರ ಕೈಗಳಲ್ಲಿ ಕೇಡು ಅದೆ; ಅವರ ಬಲಗೈ ಲಂಚಗಳಿಂದ ತುಂಬಿದೆ.
26:11b.PSA.026.011 ನಾನಾದರೋ ನನ್ನ ಯಥಾರ್ಥತ್ವದಲ್ಲಿ ನಡೆಯು ತ್ತೇನೆ: ನನ್ನನ್ನು ವಿಮೋಚಿಸು; ನನಗೆ ಕರುಣೆಯುಳ್ಳ ವನಾಗಿರು.ನನ್ನ ಪಾದವು ಸಮಸ್ಥಳದಲ್ಲಿ ನಿಲ್ಲುತ್ತದೆ; ಸಭೆಗಳಲ್ಲಿ ನಾನು ಕರ್ತನನ್ನು ಸ್ತುತಿಸುವೆನು.
26:12b.PSA.026.012 ನನ್ನ ಪಾದವು ಸಮಸ್ಥಳದಲ್ಲಿ ನಿಲ್ಲುತ್ತದೆ; ಸಭೆಗಳಲ್ಲಿ ನಾನು ಕರ್ತನನ್ನು ಸ್ತುತಿಸುವೆನು.
27
27:1b.PSA.027.001 ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು?
27:2b.PSA.027.002 ನನ್ನ ಮಾಂಸವನ್ನು ತಿನ್ನಬೇಕೆಂದು ದುಷ್ಟರು ಅಂದರೆ ನನ್ನ ವೈರಿಗಳೂ ಶತ್ರುಗಳೂ ಬಂದಾಗ ಅವರು ಎಡವಿಬಿದ್ದರು.
27:3b.PSA.027.003 ನನಗೆ ವಿರೋಧವಾಗಿ ದಂಡು ಇಳಿದರೂ ನನ್ನ ಹೃದಯವು ಭಯಪಡದು; ಯುದ್ಧವು ನನ್ನ ಮೇಲೆ ಎದ್ದರೂ ಇದರಲ್ಲಿಯೂ ನಾನು ಭರವಸವಾಗಿರುವೆನು.
27:4b.PSA.027.004 ಒಂದ ನ್ನೇ ಕರ್ತನಿಂದ ಬಯಸಿದೆನು, ಅದನ್ನೇ ಹುಡುಕುವೆನು; ಕರ್ತನ ರಮ್ಯತೆಯನ್ನು ದೃಷ್ಟಿಸುವದೂ ಆತನ ಮಂದಿರ ದಲ್ಲಿ ವಿಚಾರಿಸುವದೂ ನನ್ನ ಜೀವನದ ದಿನಗಳಲ್ಲೆಲ್ಲಾ ಕರ್ತನ ಆಲಯದಲ್ಲಿ ವಾಸಮಾಡುವದೂ ಆಗಿದೆ.
27:5b.PSA.027.005 ಕೇಡಿನ ಸಮಯದಲ್ಲಿ ಆತನು ತನ್ನ ಗುಡಾರದಲ್ಲಿ ನನ್ನನ್ನು ಬಚ್ಚಿಡುವನು. ತನ್ನ ಗುಪ್ತವಾದ ಡೇರೆಯಲ್ಲಿ ನನ್ನನ್ನು ಮರೆಮಾಡುವನು; ಬಂಡೆಯ ಮೇಲೆ ನನ್ನನ್ನು ನಿಲ್ಲಿಸುವನು.
27:6b.PSA.027.006 ಈಗ ನನ್ನ ಸುತ್ತಲಿರುವ ಶತ್ರುಗಳ ಮೇಲೆ ನನ್ನ ತಲೆಯು ಎತ್ತಲ್ಪಟ್ಟಿರುವದು. ಆದದರಿಂದ ಆತನ ಗುಡಾರದಲ್ಲಿ ಉತ್ಸಾಹದ ಬಲಿಗಳನ್ನು ಅರ್ಪಿ ಸುವೆನು; ಹೌದು, ಕರ್ತನಿಗೆ ಹಾಡಿ ಕೀರ್ತಿಸುವೆನು.
27:7b.PSA.027.007 ಓ ಕರ್ತನೇ, ನಾನು ಕೂಗುವ ಸ್ವರವನ್ನು ಕೇಳು; ನನ್ನನ್ನು ಕರುಣಿಸಿ ನನಗೆ ಉತ್ತರಕೊಡು.
27:8b.PSA.027.008 ನೀನು--ನನ್ನ ಮುಖವನ್ನು ನೀವು ಹುಡುಕಿರಿ ಎಂದು ಹೇಳಿದಿಯಲ್ಲಾ. ಕರ್ತನೇ, ನಿನ್ನ ಮುಖವನ್ನು ಹುಡು ಕುವೆನು ಎಂದು ನನ್ನ ಹೃದಯವು ನಿನಗೆ ಹೇಳಿತು.
27:9b.PSA.027.009 ನಿನ್ನ ಮುಖವನ್ನು ನನಗೆ ಮರೆಮಾಡಬೇಡ; ನಿನ್ನ ಸೇವಕನನ್ನು ಕೋಪದಿಂದ ತಳ್ಳಬೇಡ; ನೀನು ನನಗೆ ಸಹಾಯಕನಾಗಿದ್ದೀ; ನನ್ನನ್ನು ವಿಸರ್ಜಿಸಬೇಡ; ನನ್ನ ರಕ್ಷಣೆಯ ಓ ದೇವರೇ, ನನ್ನನ್ನು ಬಿಟ್ಟುಬಿಡಬೇಡ.
27:10b.PSA.027.010 ನನ್ನ ತಂದೆತಾಯಂದಿರು ನನ್ನನ್ನು ತೊರೆದುಬಿಟ್ಟರೂ ಕರ್ತನು ನನ್ನನ್ನು ಸೇರಿಸಿಕೊಳ್ಳುತ್ತಾನೆ.
27:11b.PSA.027.011 ಓ ಕರ್ತನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನನ್ನ ವಿರೋಧಿಗಳ ನಿಮಿತ್ತ ಸಮವಾದ ಹಾದಿಯಲ್ಲಿ ನನ್ನನ್ನು ನಡಿಸು.
27:12b.PSA.027.012 ನನ್ನ ವೈರಿಗಳ ಇಷ್ಟಕ್ಕೆ ನನ್ನನ್ನು ಕೊಟ್ಟುಬಿಡಬೇಡ; ಸುಳ್ಳು ಸಾಕ್ಷಿಗಳೂ ಕ್ರೂರತ್ವದ ಶ್ವಾಸಬಿಡುವವರೂ ನನಗೆ ವಿರೋಧವಾಗಿ ಎದ್ದಿದ್ದಾರೆ.
27:13b.PSA.027.013 ಜೀವಿತರ ದೇಶದಲ್ಲಿ ಕರ್ತನ ಒಳ್ಳೇತನ ವನ್ನು ನೋಡುವೆನೆಂದು ನಾನು ನಂಬದೆ ಹೋಗಿದ್ದರೆ ಮೂರ್ಛೆ ಹೋಗುತ್ತಿದ್ದೆನು.ಕರ್ತನಿಗಾಗಿ ಕಾದಿರು, ಧೈರ್ಯವಾಗಿರು; ಆತನು ನಿನ್ನ ಹೃದಯವನ್ನು ಬಲ ಪಡಿಸುವನು. ಕರ್ತನಿಗಾಗಿ ಕಾದಿರು ಎಂದು ನಾನು ಹೇಳುವೆನು.
27:14b.PSA.027.014 ಕರ್ತನಿಗಾಗಿ ಕಾದಿರು, ಧೈರ್ಯವಾಗಿರು; ಆತನು ನಿನ್ನ ಹೃದಯವನ್ನು ಬಲ ಪಡಿಸುವನು. ಕರ್ತನಿಗಾಗಿ ಕಾದಿರು ಎಂದು ನಾನು ಹೇಳುವೆನು.
28
28:1b.PSA.028.001 ನನ್ನ ಬಂಡೆಯಾದ ಓ ಕರ್ತನೇ, ನಿನಗೆ ಮೊರೆಯಿಡುತ್ತೇನೆ; ಮೌನವಾಗಿರಬೇಡ. ನೀನು ಸುಮ್ಮನಿದ್ದರೆ ನಾನು ಕುಣಿಯಲ್ಲಿ ಇಳಿಯುವವರಿಗೆ ಸಮಾನನಾಗುವೆನು.
28:2b.PSA.028.002 ನಾನು ನಿನಗೆ ಮೊರೆಯಿಡು ವಾಗ ನನ್ನ ಕೈಗಳನ್ನು ನಿನ್ನ ಪರಿಶುದ್ಧ ದೈವೋಕ್ತಿಯ ಕಡೆಗೆ ಎತ್ತುವಾಗ ನನ್ನ ವಿಜ್ಞಾಪನೆಯ ಶಬ್ದವನ್ನು ಕೇಳು.
28:3b.PSA.028.003 ದುಷ್ಟರ ಸಂಗಡಲೂ ಅಪರಾಧಮಾಡುವವರ ಸಂಗಡಲೂ ನನ್ನನ್ನು ಎಳೆಯಬೇಡ; ತಮ್ಮ ನೆರೆಯವರಿಗೆ ಅವರು ಸಮಾಧಾನವಾಗಿ ಮಾತನಾಡುತ್ತಾರೆ; ಕೇಡು ಅವರ ಹೃದಯದಲ್ಲಿ ಅದೆ.
28:4b.PSA.028.004 ಅವರ ಕೃತ್ಯಗಳ ಪ್ರಕಾರ ವಾಗಿಯೂ ಕೆಟ್ಟತನದ ಕ್ರಿಯೆಗಳ ಪ್ರಕಾರವಾಗಿಯೂ ಅವರಿಗೆ ಕೊಡು; ಅವರ ಕೈಗಳ ಕೆಲಸದ ಪ್ರಕಾರವಾಗಿ ಅವರಿಗೆ ಕೊಡು. ಅವರ ಪ್ರತೀಕಾರವನ್ನು ಅವರಿಗೆ ತಿರುಗಮಾಡು.
28:5b.PSA.028.005 ಕರ್ತನ ಕೃತ್ಯಗಳನ್ನೂ ಆತನ ಕೈಗಳ ಕೆಲಸವನ್ನೂ ಅವರು ಲಕ್ಷಿಸುವದಿಲ್ಲ, ಆದದರಿಂದ ಅವರನ್ನು ವೃದ್ಧಿಗೊಳಿಸದೆ ನಿರ್ಮೂಲಮಾಡು.
28:6b.PSA.028.006 ಕರ್ತನಿಗೆ ಸ್ತುತಿಯುಂಟಾಗಲಿ; ನನ್ನ ವಿಜ್ಞಾಪನೆ ಗಳನ್ನು ಆತನು ಕೇಳಿದ್ದಾನೆ.
28:7b.PSA.028.007 ಕರ್ತನು ನನ್ನ ಬಲವೂ ಗುರಾಣಿಯೂ ಆಗಿದ್ದಾನೆ; ನನ್ನ ಹೃದಯವು ಆತನಲ್ಲಿ ಭರವಸವಿಟ್ಟದ್ದರಿಂದ ಸಹಾಯ ಹೊಂದಿದೆನು; ಆದದರಿಂದ ನನ್ನ ಹೃದಯವು ಬಹಳವಾಗಿ ಉತ್ಸಾಹ ಪಡುವದು; ನನ್ನ ಹಾಡಿನಿಂದ ಆತನನ್ನು ಕೊಂಡಾ ಡುವೆನು.
28:8b.PSA.028.008 ಕರ್ತನು ಅವರಿಗೆ ಬಲವಾಗಿದ್ದಾನೆ; ತನ್ನ ಅಭಿಷಕ್ತನ ರಕ್ಷಣೆಯ ಬಲವು ಆತನೇ.ನಿನ್ನ ಜನ ರನ್ನು ರಕ್ಷಿಸು; ನಿನ್ನ ಸ್ವಾಸ್ಥ್ಯವನ್ನು ಆಶೀರ್ವದಿಸು; ಅವರನ್ನು ಪರಿಪಾಲಿಸುತ್ತಾ ಯುಗಯುಗಕ್ಕೂ ಅವ ರನ್ನು ಮೇಲಕ್ಕೆ ಎತ್ತು.
28:9b.PSA.028.009 ನಿನ್ನ ಜನ ರನ್ನು ರಕ್ಷಿಸು; ನಿನ್ನ ಸ್ವಾಸ್ಥ್ಯವನ್ನು ಆಶೀರ್ವದಿಸು; ಅವರನ್ನು ಪರಿಪಾಲಿಸುತ್ತಾ ಯುಗಯುಗಕ್ಕೂ ಅವ ರನ್ನು ಮೇಲಕ್ಕೆ ಎತ್ತು.
29
29:1b.PSA.029.001 ಓ ಪರಾಕ್ರಮಶಾಲಿಗಳೇ, ಕರ್ತನಿಗೆ ಘನವನ್ನೂ ಬಲವನ್ನೂ ಸಲ್ಲಿಸಿರಿ;
29:2b.PSA.029.002 ಕರ್ತನ ಹೆಸರಿಗೆ ಸಲ್ಲತಕ್ಕ ಘನವನ್ನು ಸಲ್ಲಿಸಿರಿ; ಕರ್ತನಿಗೆ ಪರಿಶುದ್ಧತ್ವದ ಸೌಂದರ್ಯದಲ್ಲಿ ಆರಾಧಿಸಿರಿ.
29:3b.PSA.029.003 ಕರ್ತನ ಧ್ವನಿಯು ನೀರುಗಳ ಮೇಲೆ ಅದೆ. ಮಹಿ ಮೆಯ ದೇವರು ಗುಡುಗುತ್ತಾನೆ. ಕರ್ತನು ಬಹಳ ನೀರುಗಳ ಮೇಲೆ ಇದ್ದಾನೆ.
29:4b.PSA.029.004 ಕರ್ತನ ಧನ್ವಿಯು ಶಕ್ತಿ ಯುಳ್ಳದ್ದು; ಪ್ರಭೆಯುಳ್ಳದ್ದು.
29:5b.PSA.029.005 ಕರ್ತನ ಸ್ವರವು ದೇವ ದಾರುಗಳನ್ನು ಮುರಿಯುತ್ತದೆ; ಹೌದು, ಕರ್ತನು ಲೆಬನೋನಿನ ದೇವದಾರುಗಳನ್ನು ಮುರಿಯುತ್ತಾನೆ.
29:6b.PSA.029.006 ಅವುಗಳನ್ನು ಕರುವಿನ ಹಾಗೆಯೂ ಲೆಬನೋನನ್ನೂ ಶಿರಿಯೋನನ್ನೂ ಎಳೇಕಾಡುಕೋಣದ ಹಾಗೆಯೂ ಹಾರಾಡುವಂತೆ ಮಾಡುತ್ತಾನೆ.
29:7b.PSA.029.007 ಕರ್ತನ ಸ್ವರವು ಅಗ್ನಿ ಜ್ವಾಲೆಗಳನ್ನು ಭೇದಿಸುತ್ತದೆ.
29:8b.PSA.029.008 ಕರ್ತನ ಸ್ವರವು ಅರಣ್ಯ ವನ್ನು ಕದಲಿಸುತ್ತದೆ; ಕರ್ತನು ಕಾದೇಶ್ ಅರಣ್ಯವನ್ನು ಕದಲಿಸುತ್ತಾನೆ.
29:9b.PSA.029.009 ಕರ್ತನ ಸ್ವರವು ಜಿಂಕೆಗಳನ್ನು ಈಯ ಮಾಡಿ ಅಡವಿಗಳನ್ನು ಬಯಲು ಮಾಡುತ್ತದೆ; ಆತನ ಮಂದಿರದಲ್ಲಿ ಪ್ರತಿಯೊಬ್ಬನು ಆತನ ಮಹಿಮೆಯ ವಿಷಯವಾಗಿ ಮಾತನಾಡುತ್ತಾನೆ.
29:10b.PSA.029.010 ಕರ್ತನು ಪ್ರಳಯದ ಮೇಲೆ ಕೂತುಕೊಳ್ಳುತ್ತಾನೆ; ಹೌದು, ಯುಗಯುಗಕ್ಕೂ ಕರ್ತನು ಅರಸನಾಗಿ ಕೂತು ಕೊಂಡಿದ್ದಾನೆ.ಕರ್ತನು ತನ್ನ ಜನರಿಗೆ ಬಲವನ್ನು ಕೊಡುವನು; ಕರ್ತನು ತನ್ನ ಜನರನ್ನು ಸಮಾಧಾನ ದಿಂದ ಆಶೀರ್ವದಿಸುವನು.
29:11b.PSA.029.011 ಕರ್ತನು ತನ್ನ ಜನರಿಗೆ ಬಲವನ್ನು ಕೊಡುವನು; ಕರ್ತನು ತನ್ನ ಜನರನ್ನು ಸಮಾಧಾನ ದಿಂದ ಆಶೀರ್ವದಿಸುವನು.
30
30:1b.PSA.030.001 ಓ ಕರ್ತನೇ, ನಿನ್ನನ್ನು ಕೊಂಡಾಡುವೆನು; ನೀನು ನನ್ನ ಶತ್ರುಗಳು ನನ್ನ ವಿಷಯದಲ್ಲಿ ಸಂತೋಷಪಡದಂತೆ ಮಾಡಿ ನನ್ನನ್ನು ಮೇಲಕ್ಕೆ ಎತ್ತಿದ್ದೀ.
30:2b.PSA.030.002 ನನ್ನ ದೇವರಾದ ಓ ಕರ್ತನೇ, ನಿನಗೆ ಮೊರೆಯಿಡಲು ನನ್ನನ್ನು ಸ್ವಸ್ಥಮಾಡಿದ್ದೀ.
30:3b.PSA.030.003 ಓ ಕರ್ತನೇ, ನನ್ನ ಪ್ರಾಣವನ್ನು ಸಮಾಧಿಯಿಂದ ಎತ್ತಿದ್ದೀ; ನಾನು ತಗ್ಗಿಗೆ ಇಳಿಯದಂತೆ ನನ್ನನ್ನು ಜೀವದಲ್ಲಿ ಕಾಪಾಡಿದ್ದೀ.
30:4b.PSA.030.004 ಓ ಕರ್ತನ ಪರಿಶುದ್ಧರೇ, ಆತನನ್ನು ಕೀರ್ತಿಸಿರಿ; ಆತನ ಪರಿಶುದ್ಧತ್ವವನ್ನು ಜ್ಞಾಪಕಮಾಡಿ ಕೊಂಡಾಡಿರಿ.
30:5b.PSA.030.005 ಆತನ ಕೋಪವು ಕ್ಷಣಮಾತ್ರ. ಆತನ ಕಟಾಕ್ಷವು ಜೀವವೇ; ರಾತ್ರಿಯಲ್ಲಿ ದುಃಖವು ತಂಗಬಹುದಾದರೂ ಬೆಳಿಗ್ಗೆ ಆನಂದವು ಬರುವದು.
30:6b.PSA.030.006 ನನ್ನ ಅಭಿವೃದ್ಧಿಯಲ್ಲಿ--ನಾನು ಎಂದಿಗೂ ಕದಲು ವದಿಲ್ಲ ಎಂದು ಹೇಳಿದೆನು.
30:7b.PSA.030.007 ಕರ್ತನೇ, ನಿನ್ನ ಕಟಾ ಕ್ಷದಿಂದ ನನ್ನ ಬೆಟ್ಟವು ಸ್ಥಿರವಾಗಿ ನಿಲ್ಲುವಂತೆ ಮಾಡಿದ್ದೀ, ನಿನ್ನ ಮುಖವನ್ನು ಮರೆಮಾಡಲು ಕಳವಳಗೊಂಡೆನು.
30:8b.PSA.030.008 ಓ ಕರ್ತನೇ, ನಾನು ನಿನಗೆ ಕೂಗಿಕೊಂಡೆನು; ಕರ್ತ ನಿಗೆ ವಿಜ್ಞಾಪನೆ ಮಾಡಿದೆನು.
30:9b.PSA.030.009 ನಾನು ಕುಣಿಯಲ್ಲಿಳಿ ದರೆ ನನ್ನ ರಕ್ತದಲ್ಲಿ ಲಾಭವೇನು? ಧೂಳು ನಿನ್ನನ್ನು ಕೊಂಡಾಡುವದೋ? ಅದು ನಿನ್ನ ಸತ್ಯವನ್ನು ತಿಳಿಸು ವದೋ?
30:10b.PSA.030.010 ಓ ಕರ್ತನೇ, ಕೇಳು; ನನ್ನ ಮೇಲೆ ಕರುಣೆಯಿಡು. ಕರ್ತನೇ, ನನಗೆ ಸಹಾಯಕನಾಗಿರು.
30:11b.PSA.030.011 ನೀನು ನನ್ನ ಗೋಳಾಟವನ್ನು ಕುಣಿದಾಟಕ್ಕೆ ತಿರು ಗಿಸಿದ್ದೀ; ನನ್ನ ಗೋಣಿತಟ್ಟನ್ನು ತೆಗೆದುಹಾಕಿ ಸಂತೋಷ ದಿಂದ ನನ್ನ ನಡುವನ್ನು ಕಟ್ಟಿದ್ದೀ.ಹೀಗೆ ನನ್ನ ಹೆಚ್ಚಳವು ಮೌನವಾಗಿರದೆ ನಿನ್ನನ್ನು ಕೀರ್ತಿಸುವದು. ನನ್ನ ದೇವರಾದ ಓ ಕರ್ತನೇ, ಯುಗಯುಗಕ್ಕೂ ನಿನ್ನನ್ನು ಕೊಂಡಾಡುವೆನು.
30:12b.PSA.030.012 ಹೀಗೆ ನನ್ನ ಹೆಚ್ಚಳವು ಮೌನವಾಗಿರದೆ ನಿನ್ನನ್ನು ಕೀರ್ತಿಸುವದು. ನನ್ನ ದೇವರಾದ ಓ ಕರ್ತನೇ, ಯುಗಯುಗಕ್ಕೂ ನಿನ್ನನ್ನು ಕೊಂಡಾಡುವೆನು.
31
31:1b.PSA.031.001 ಓ ಕರ್ತನೇ, ನಿನ್ನಲ್ಲಿ ಭರವಸವಿಟ್ಟು ಕೊಂಡಿದ್ದೇನೆ; ನಾನು ಎಂದಿಗೂ ಆಶಾ ಭಂಗಪಡದಂತೆ ಮಾಡು; ನಿನ್ನ ನೀತಿಯಲ್ಲಿ ನನ್ನನ್ನು ರಕ್ಷಿಸು.
31:2b.PSA.031.002 ನಿನ್ನ ಕಿವಿಯನ್ನು ನನ್ನ ಕಡೆಗೆ ತಿರುಗಿಸು; ಬೇಗ ನನ್ನನ್ನು ರಕ್ಷಿಸು. ನನ್ನನ್ನು ರಕ್ಷಿಸುವದಕ್ಕೆ ನನಗೆ ಬಲವಾದ ಬಂಡೆಯೂ ರಕ್ಷಣಾ ಮನೆಯೂ ಆಗಿರು.
31:3b.PSA.031.003 ನನ್ನ ಬಂಡೆಯೂ ಕೋಟೆಯೂ ನೀನೇ; ನಿನ್ನ ಹೆಸರಿನ ನಿಮಿತ್ತ ನನ್ನನ್ನು ನಡಿಸು; ನನಗೆ ಮಾರ್ಗ ದರ್ಶಕನಾಗಿರು.
31:4b.PSA.031.004 ಅವರು ಗುಪ್ತವಾಗಿ ಒಡ್ಡಿದ ಬಲೆ ಯೊಳಗಿಂದ ನನ್ನನ್ನು ಹೊರಗೆ ಎಳೆ; ನೀನು ನನ್ನ ಬಲವಾಗಿದ್ದೀ.
31:5b.PSA.031.005 ಸತ್ಯದ ದೇವರಾದ ಓ ಕರ್ತನೇ, ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸುತ್ತೇನೆ; ನೀನು ನನ್ನನ್ನು ವಿಮೋಚನೆ ಮಾಡಿದ್ದೀ.
31:6b.PSA.031.006 ವ್ಯರ್ಥವಾದ ಸುಳ್ಳುಗಳನ್ನ ನುಸರಿಸುವವರನ್ನು ನಾನು ಹಗೆಮಾಡುತ್ತೇನೆ; ಆದರೆ ನಾನು ಕರ್ತನಲ್ಲಿ ಭರವಸವಿಡುತ್ತೇನೆ.
31:7b.PSA.031.007 ನಿನ್ನ ಕರುಣೆ ಯಲ್ಲಿ ಉಲ್ಲಾಸಿಸಿ ಸಂತೋಷಪಡುವೆನು; ಯಾಕಂ ದರೆ ನೀನು ನನ್ನ ಕಷ್ಟವನ್ನು ಲಕ್ಷ್ಯಕ್ಕೆ ತಂದು ನನ್ನ ಪ್ರಾಣವು ಇಕ್ಕಟ್ಟುಗಳಲ್ಲಿರುವದನ್ನು ಅರಿತಿದ್ದೀಯಲ್ಲಾ.
31:8b.PSA.031.008 ಶತ್ರುವಿನ ಕೈಯಲ್ಲಿ ನನ್ನನ್ನು ಒಪ್ಪಿಸಿಬಿಡಲಿಲ್ಲ; ನನ್ನ ಪಾದಗಳನ್ನು ಅಗಲವಾದ ಸ್ಥಳದಲ್ಲಿ ನಿಲ್ಲಿಸಿದ್ದೀ.
31:9b.PSA.031.009 ಓ ಕರ್ತನೇ, ನನ್ನನ್ನು ಕರುಣಿಸು; ನಾನು ಇಕ್ಕಟ್ಟಿ ನಲ್ಲಿದ್ದೇನೆ. ನನ್ನ ಕಣ್ಣೂ ಪ್ರಾಣವೂ ಹೊಟ್ಟೆಯೂ ದುಃಖದಿಂದ ಕ್ಷೀಣವಾಗಿವೆ.
31:10b.PSA.031.010 ನನ್ನ ಜೀವವು ಚಿಂತೆ ಯಿಂದಲೂ ನನ್ನ ವರುಷಗಳು ನಿಟ್ಟುಸುರಿನಿಂದಲೂ ತೀರಿಹೋಗಿವೆ; ನನ್ನ ಶಕ್ತಿಯು ನನ್ನ ಅಪರಾಧದಿಂದ ಕುಂದಿ ಎಲುಬುಗಳು ಕ್ಷೀಣವಾಗಿವೆ.
31:11b.PSA.031.011 ನನ್ನ ವೈರಿ ಗಳೆಲ್ಲರಿಗೆ, ವಿಶೇಷವಾಗಿ ನನ್ನ ನೆರೆಯವರಿಗೆ, ನಾನು ನಿಂದೆಯೂ ಪರಿಚಿತರಿಗೆ ಹೆದರಿಕೆಯೂ ಆಗಿದ್ದೇನೆ; ಹೊರಗೆ ನನ್ನನ್ನು ನೋಡಿದವರು ನನ್ನನ್ನು ಬಿಟ್ಟು ಓಡಿಹೋದರು.
31:12b.PSA.031.012 ಸತ್ತವನ ಹಾಗೆ ಮನಸ್ಸಿನೊಳಗಿಂದ ಮರೆತು ಬಿಡಲ್ಪಟ್ಟಿದ್ದೇನೆ; ನಾನು ಒಡೆದ ಬೋಕಿಯ ಹಾಗೆ ಇದ್ದೆನೆ.
31:13b.PSA.031.013 ನಾನು ಅನೇಕರ ಚಾಡಿಯನ್ನು ಕೇಳಿದ್ದೇನೆ; ಸುತ್ತಲೂ ಭಯ ಅದೆ; ನನಗೆ ವಿರೋಧ ವಾಗಿ ಆಲೋಚನೆ ಮಾಡಿ ನನ್ನ ಪ್ರಾಣ ತೆಗೆದು ಕೊಳ್ಳುವದಕ್ಕೆ ಅವರು ಯೋಚಿಸುತ್ತಾರೆ.
31:14b.PSA.031.014 ಓ ಕರ್ತನೇ, ನಾನು ನಿನ್ನಲ್ಲಿ ಭರವಸವಿಟ್ಟಿದ್ದೇನೆ; ನನ್ನ ದೇವರು ನೀನೇ ಎಂದು ಹೇಳಿದ್ದೇನೆ.
31:15b.PSA.031.015 ನನ್ನ ಆಯ ಷ್ಕಾಲವು ನಿನ್ನ ಕೈಯಲ್ಲಿದೆ; ಶತ್ರುಗಳ ಕೈಯಿಂದಲೂ ಹಿಂಸೆಪಡಿಸುವವರಿಂದಲೂ ನನ್ನನ್ನು ಬಿಡಿಸು.
31:16b.PSA.031.016 ನಿನ್ನ ಮುಖವು ನಿನ್ನ ಸೇವಕನ ಮೇಲೆ ಪ್ರಕಾಶಿಸಲಿ, ನಿನ್ನ ಕರುಣೆಯಿಂದ ನನ್ನನ್ನು ರಕ್ಷಿಸು.
31:17b.PSA.031.017 ಓ ಕರ್ತನೇ, ನಿನಗೆ ಮೊರೆಯಿಟ್ಟಿದ್ದೇನೆ; ನಾನು ಆಶಾಭಂಗಪಡ ದಂತೆ ಮಾಡು; ದುಷ್ಟರು ಆಶಾಭಂಗಪಡಲಿ; ಅವರು ಸಮಾಧಿಯಲ್ಲಿ ಮೌನವಾಗಿರಲಿ.
31:18b.PSA.031.018 ನೀತಿವಂತರ ಮೇಲೆ ಗರ್ವದಿಂದಲೂ ತಿರಸ್ಕಾರದಿಂದಲೂ ಕಠಿಣ ವಾಗಿ ಮಾತನಾಡುವ ಸುಳ್ಳಿನ ತುಟಿಗಳು ಮೌನ ವಾಗಲಿ.
31:19b.PSA.031.019 ನಿನಗೆ ಭಯಪಡುವವರಿಗೋಸ್ಕರ ಮನುಷ್ಯ ಪುತ್ರರ ಮುಂದೆ ನಿನ್ನಲ್ಲಿ ಭರವಸೆ ಇಟ್ಟವರಿಗೋಸ್ಕರ ನೀನು ಇಟ್ಟಿರುವ ಒಳ್ಳೇತನವು ಎಷ್ಟೋ ದೊಡ್ಡದು.
31:20b.PSA.031.020 ಅವರನ್ನು ನಿನ್ನ ಸನ್ನಿಧಾನದ ಮರೆಯಲ್ಲಿ ಮನು ಷ್ಯರ ಗರ್ವಕ್ಕೆ ನೀನು ಮರೆಮಾಡುತ್ತೀ; ನಾಲಿಗೆಗಳ ವಿವಾದಕ್ಕೆ ಡೇರೆಯಲ್ಲಿ ಗುಪ್ತವಾಗಿ ಅವರನ್ನು ಕಾಪಾ ಡುವಿ.
31:21b.PSA.031.021 ಆತನು ಭದ್ರವಾದ ಪಟ್ಟಣದಲ್ಲಿ ತನ್ನ ಆಶ್ಚ ರ್ಯವಾದ ಕರುಣೆ ನನಗೆ ತೋರಿಸಿದ್ದಾನೆ ಕರ್ತ ನಿಗೆ ಸ್ತೋತ್ರ.
31:22b.PSA.031.022 ಆದರೆ ನಾನು ನಿನ್ನ ಕಣ್ಣುಗಳ ಎದುರಿನಿಂದ ಕಡಿದು ಹಾಕಲ್ಪಟ್ಟಿದ್ದೇನೆಂದು ಆತುರ ದಲ್ಲಿ ಹೇಳಿದೆನು; ಆದರೂ ನಾನು ಮೊರೆಯಿಡು ವಾಗ ನನ್ನ ವಿಜ್ಞಾಪನೆಗಳ ಸ್ವರವನ್ನು ನೀನು ಕೇಳಿದಿ.
31:23b.PSA.031.023 ಕರ್ತನ ಎಲ್ಲಾ ಪರಿಶುದ್ಧರೇ, ಆತನನ್ನು ಪ್ರೀತಿ ಮಾಡಿರಿ; ಕರ್ತನು ನಂಬಿಕೆಯುಳ್ಳವರನ್ನು ಕಾಯು ತ್ತಾನೆ; ಅಹಂಕಾರ ಮಾಡುವವನಿಗೆ ಬಹಳವಾಗಿ ಮುಯ್ಯಿಗೆಮುಯ್ಯಿ ತೀರಿಸುತ್ತಾನೆ.ಕರ್ತನಲ್ಲಿ ನಿರೀಕ್ಷಿ ಸುವವರೆಲ್ಲರೇ, ಧೈರ್ಯವಾಗಿರ್ರಿ; ಆತನು ನಿಮ್ಮ ಹೃದಯವನ್ನು ದೃಢಪಡಿಸುವನು.
31:24b.PSA.031.024 ಕರ್ತನಲ್ಲಿ ನಿರೀಕ್ಷಿ ಸುವವರೆಲ್ಲರೇ, ಧೈರ್ಯವಾಗಿರ್ರಿ; ಆತನು ನಿಮ್ಮ ಹೃದಯವನ್ನು ದೃಢಪಡಿಸುವನು.
32
32:1b.PSA.032.001 ಯಾವನ ದ್ರೋಹವು ಕ್ಷಮಿಸಲ್ಪಟ್ಟದೆಯೋ, ಯಾವನ ಪಾಪವು ಮುಚ್ಚಲ್ಪಟ್ಟಿದೆಯೋ, ಅವನೇ ಧನ್ಯನು.
32:2b.PSA.032.002 ಕರ್ತನು ಯಾವನಿಗೆ ಅಪರಾಧ ವನ್ನು ಎಣಿಸುವದಿಲ್ಲವೋ, ಯಾವನ ಹೃದಯದಲ್ಲಿ ವಂಚನೆ ಇರುವದಿಲ್ಲವೋ, ಆ ಮನುಷ್ಯ ಧನ್ಯನು.
32:3b.PSA.032.003 ನಾನು ಮೌನವಾಗಿದ್ದಾಗ ದಿನವೆಲ್ಲಾ ನರಳುವದ ರಿಂದ ನನ್ನ ಎಲುಬುಗಳು ಸವೆದು ಹೋದವು.
32:4b.PSA.032.004 ರಾತ್ರಿ ಹಗಲು ನಿನ್ನ ಕೈ ನನ್ನ ಮೇಲೆ ಭಾರವಾಗಿತ್ತು; ಬೇಸಿಗೆಯ ಬರಗಾಲಕ್ಕೆ ನನ್ನ ಸಾರವು ತಿರುಗಿಕೊಂಡಿತು. ಸೆಲಾ.
32:5b.PSA.032.005 ನನ್ನ ಪಾಪವನ್ನು ನಿನಗೆ ತಿಳಿಸಿದೆನು. ನನ್ನ ಅಪರಾಧವನ್ನು ಮುಚ್ಚಲಿಲ್ಲ. ನನ್ನ ದ್ರೋಹಗಳನ್ನು ಕುರಿತು ಕರ್ತನಿಗೆ ಅರಿಕೆಮಾಡುವೆನೆಂದು ಹೇಳಿದೆನು; ಆಗ ನೀನು ನನ್ನ ಪಾಪದ ಅಕ್ರಮವನ್ನು ಪರಿಹರಿ ಸಿದಿ--ಸೆಲಾ.
32:6b.PSA.032.006 ಇದಕ್ಕೋಸ್ಕರ ಭಕ್ತರೆಲ್ಲರು ನಿನ್ನನ್ನು ಕಂಡುಕೊಳ್ಳುವ ಕಾಲದಲ್ಲಿ ನಿನಗೆ ಪ್ರಾರ್ಥನೆ ಮಾಡುವರು; ನಿಶ್ಚಯವಾಗಿ ಬಹಳ ನೀರಿನ ಪ್ರವಾಹ ಗಳು ಅವನ ಸವಿಾಪಕ್ಕೆ ಬರುವದಿಲ್ಲ.
32:7b.PSA.032.007 ನೀನು ನನ್ನ ಮರೆಯು; ಇಕ್ಕಟ್ಟಿನಿಂದ ನನ್ನನ್ನು ಕಾಯುತ್ತೀ; ಬಿಡುಗಡೆಯ ಹಾಡುಗಳಿಂದ ನನ್ನನ್ನು ಆವರಿಸಿ ಕೊಳ್ಳುತ್ತೀ ಸೆಲಾ.
32:8b.PSA.032.008 ನಾನು -- ನಿನಗೆ ಬುದ್ದಿ ಹೇಳುವೆನು; ನೀನು ಹೋಗತಕ್ಕ ಮಾರ್ಗವನ್ನು ನಿನಗೆ ಬೋಧಿಸುವೆನು; ನನ್ನ ಕಣ್ಣಿನಿಂದ ನಿನ್ನನ್ನು ನಡಿಸುವೆನು.
32:9b.PSA.032.009 ಆದದರಿಂದ ವಿವೇಕವಿಲ್ಲದ ಕುದುರೆಯ ಹಾಗೆಯೂ ಹೇಸರ ಕತ್ತೆಯ ಹಾಗೆಯೂ ಇರಬೇಡಿರಿ; ಅವು ನಿನ್ನ ಸವಿಾಪಕ್ಕೆ ಬಾರದಹಾಗೆ, ಅವುಗಳು ಬಾರಿನಿಂದಲೂ ಕಡಿವಾಣ ದಿಂದಲೂ ಬಿಗಿಸಲ್ಪಡತಕ್ಕದ್ದು.
32:10b.PSA.032.010 ದುಷ್ಟರಿಗೆ ವ್ಯಥೆಗಳು ಬಹಳ; ಆದರೆ ಕರ್ತನಲ್ಲಿ ಭರವಸವಿಡುವವನನ್ನು ಕರುಣೆಯು ಸುತ್ತಿಕೊಳ್ಳು ವದು.ನೀತಿವಂತರೇ, ಕರ್ತನಲ್ಲಿ ಸಂತೋಷಿಸಿರಿ, ಉಲ್ಲಾಸಪಡಿರಿ; ಯಥಾರ್ಥ ಹೃದಯಉಳ್ಳವರೇ, ಉತ್ಸಾಹ ಧ್ವನಿಮಾಡಿರಿ.
32:11b.PSA.032.011 ನೀತಿವಂತರೇ, ಕರ್ತನಲ್ಲಿ ಸಂತೋಷಿಸಿರಿ, ಉಲ್ಲಾಸಪಡಿರಿ; ಯಥಾರ್ಥ ಹೃದಯಉಳ್ಳವರೇ, ಉತ್ಸಾಹ ಧ್ವನಿಮಾಡಿರಿ.
33
33:1b.PSA.033.001 ಓ ನೀತಿವಂತರೇ, ನೀವು ಕರ್ತನಲ್ಲಿ ಸಂತೋಷಪಡಿರಿ; ಯಥಾರ್ಥರು ಸ್ತೋತ್ರ ಮಾಡುವದು ಯೋಗ್ಯವಾಗಿದೆ.
33:2b.PSA.033.002 ಕರ್ತನನ್ನು ಕಿನ್ನರಿ ಯಿಂದ ಕೊಂಡಾಡಿರಿ; ಹತ್ತು ತಂತಿಗಳ ವೀಣೆಯಿಂದ ಆತನನ್ನು ಕೀರ್ತಿಸಿರಿ.
33:3b.PSA.033.003 ಆತನಿಗೆ ಹೊಸ ಹಾಡನ್ನು ಹಾಡಿರಿ; ಮಹಾಧ್ವನಿಯಿಂದ ಇಂಪಾಗಿ ಬಾರಿಸಿರಿ.
33:4b.PSA.033.004 ಕರ್ತನ ವಾಕ್ಯವು ಯಥಾರ್ಥವಾದದ್ದು. ಆತನ ಕೆಲಸಗಳೆಲ್ಲಾ ಸತ್ಯದಲ್ಲಿ ಮಾಡಲ್ಪಟ್ಟಿವೆ.
33:5b.PSA.033.005 ಆತನು ನೀತಿ ನ್ಯಾಯಗಳನ್ನು ಪ್ರೀತಿಮಾಡುತ್ತಾನೆ; ಭೂಮಿ ಎಲ್ಲಾ ಕರ್ತನ ಒಳ್ಳೇತನದಿಂದ ತುಂಬಿದೆ.
33:6b.PSA.033.006 ಕರ್ತನ ವಾಕ್ಯ ದಿಂದ ಆಕಾಶವೂ ಆತನ ಬಾಯಿಯ ಉಸುರಿನಿಂದ ಅದರ ಸೈನ್ಯವೆಲ್ಲವೂ ಉಂಟಾದವು.
33:7b.PSA.033.007 ಆತನು ಸಮು ದ್ರದ ನೀರುಗಳನ್ನು ರಾಶಿಯಾಗಿ ಕೂಡಿಸುತ್ತಾನೆ; ಆಗಾಧವನ್ನು ಉಗ್ರಾಣಗಳಲ್ಲಿ ಇಡುತ್ತಾನೆ.
33:8b.PSA.033.008 ಭೂಮಿ ಯೆಲ್ಲಾ ಕರ್ತನಿಗೆ ಭಯಪಡಲಿ; ಭೂಲೋಕ ನಿವಾಸಿ ಗಳೆಲ್ಲರು ಆತನಿಗೆ ಹೆದರಲಿ.
33:9b.PSA.033.009 ಆತನು ಹೇಳಲು ಆಯಿತು; ಆಜ್ಞಾಪಿಸಲು ಅದು ಸ್ಥಿರವಾಯಿತು.
33:10b.PSA.033.010 ಕರ್ತನು ಜನಾಂಗಗಳ ಆಲೋಚನೆಯನ್ನು ವ್ಯರ್ಥ ಮಾಡುವನು; ಜನರ ಕಲ್ಪನೆಗಳನ್ನು ನಿಷ್ಫಲಮಾಡು ತ್ತಾನೆ.
33:11b.PSA.033.011 ಕರ್ತನ ಆಲೋಚನೆಯು ಎಂದೆಂದಿಗೂ ಆತನ ಹೃದಯದ ಆಲೋಚನೆಗಳು ತಲತಲಾಂತ ರಕ್ಕೂ ನಿಲ್ಲುವವು.
33:12b.PSA.033.012 ಕರ್ತನು ಯಾರ ದೇವರಾಗಿರು ವನೋ ಯಾವ ಜನಾಂಗವನ್ನು ತನ್ನ ಸ್ವಾಸ್ಥ್ಯವನ್ನಾಗಿ ಆದುಕೊಂಡಿದ್ದಾನೋ ಆ ಜನರೇ ಧನ್ಯರು.
33:13b.PSA.033.013 ಕರ್ತನು ಆಕಾಶದಿಂದ ಮನುಷ್ಯರ ಮಕ್ಕಳೆಲ್ಲರನ್ನು ದೃಷ್ಟಿಸಿ ನೋಡುತ್ತಾನೆ.
33:14b.PSA.033.014 ತನ್ನ ನಿವಾಸಸ್ಥಳದಿಂದ ಭೂನಿವಾ ಸಿಗಳೆಲ್ಲರ ಮೇಲೆ ಕಣ್ಣಿಡುತ್ತಾನೆ.
33:15b.PSA.033.015 ಅವರ ಹೃದಯ ಗಳನ್ನು ಏಕವಾಗಿ ರೂಪಿಸಿ ಅವರ ಕೆಲಸಗಳನ್ನೆಲ್ಲಾ ಗ್ರಹಿಸಿಕೊಳ್ಳುವವನು ಆತನೇ.
33:16b.PSA.033.016 ಯಾವ ಅರಸನೂ ಅಧಿಕವಾದ ಸೈನ್ಯದಿಂದ ರಕ್ಷಿಸಲ್ಪಡುವದಿಲ್ಲ. ಪರಾಕ್ರಮ ಶಾಲಿಯು ಅಧಿಕಶಕ್ತಿಯಿಂದ ಬಿಡಿಸಲ್ಪಡುವದಿಲ್ಲ.
33:17b.PSA.033.017 ಕುದುರೆಯು ಭದ್ರತೆಗೆ ವ್ಯರ್ಥವಾಗಿದೆ; ಇಲ್ಲವೆ ತನ್ನ ಅಧಿಕಬಲದಿಂದ ಯಾರನ್ನೂ ತಪ್ಪಿಸುವದಿಲ್ಲ.
33:18b.PSA.033.018 ಇಗೋ, ಕರ್ತನ ಕಣ್ಣು ಆತನಿಗೆ ಭಯಪಡುವ ವರ ಮೇಲೆಯೂ ಆತನ ಕರುಣೆಯನ್ನು ಎದುರು ನೋಡುವವರ ಮೇಲೆಯೂ ಅದೆ.
33:19b.PSA.033.019 ಇದರಿಂದ ಅವರ ಪ್ರಾಣವನ್ನು ಮರಣದಿಂದ ಬಿಡಿಸಿ ಬರಗಾಲ ದಲ್ಲಿ ಅವರ ಜೀವವನ್ನು ಕಾಪಾಡುತ್ತಾನೆ.
33:20b.PSA.033.020 ನಮ್ಮ ಪ್ರಾಣವು ಕರ್ತನಿಗಾಗಿ ಕಾದುಕೊಳ್ಳುತ್ತದೆ; ನಮ್ಮ ಸಹಾಯವೂ ಗುರಾಣಿಯೂ ಆತನೇ.
33:21b.PSA.033.021 ಆತನಲ್ಲಿ ನಮ್ಮ ಹೃದಯವು ಸಂತೋಷಿಸುತ್ತದೆ; ನಾವು ಆತನ ಪರಿಶುದ್ಧವಾದ ಹೆಸರಿನಲ್ಲಿ ಭರಸವಿಟ್ಟಿದ್ದೇವೆ.ನಾವು ನಿನ್ನನ್ನು ನಿರೀಕ್ಷಿಸುವ ಪ್ರಕಾರ ಓ ಕರ್ತನೇ, ನಿನ್ನ ಕೃಪೆಯು ನಮ್ಮ ಮೇಲೆ ಇರಲಿ.
33:22b.PSA.033.022 ನಾವು ನಿನ್ನನ್ನು ನಿರೀಕ್ಷಿಸುವ ಪ್ರಕಾರ ಓ ಕರ್ತನೇ, ನಿನ್ನ ಕೃಪೆಯು ನಮ್ಮ ಮೇಲೆ ಇರಲಿ.
34
34:1b.PSA.034.001 ನಾನು ಎಲ್ಲಾ ಕಾಲಗಳಲ್ಲಿ ಕರ್ತನನ್ನು ಸ್ತುತಿಸುವೆನು; ಆತನ ಸ್ತೋತ್ರವು ಯಾವಾ ಗಲೂ ನನ್ನ ಬಾಯಲ್ಲಿ ಇರುವದು.
34:2b.PSA.034.002 ನನ್ನ ಪ್ರಾಣವು ಕರ್ತನಲ್ಲಿ ಹೊಗಳಿಕೊಳ್ಳುವದು; ಇದನ್ನು ದೀನರು ಕೇಳಿ ಸಂತೋಷಪಡುವರು.
34:3b.PSA.034.003 ನನ್ನ ಸಂಗಡ ಕರ್ತ ನನ್ನು ಘನಪಡಿಸಿರಿ. ನಾವು ಒಟ್ಟಾಗಿ ಆತನ ಹೆಸ ರನ್ನು ಘನಪಡಿಸೋಣ.
34:4b.PSA.034.004 ನಾನು ಕರ್ತನನ್ನು ಹುಡು ಕಿದೆನು; ಆಗ ಆತನು ನನಗೆ ಉತ್ತರಕೊಟ್ಟು ನನ್ನ ಸಕಲ ಭೀತಿಗಳಿಂದ ನನ್ನನ್ನು ಬಿಡಿಸಿದನು.
34:5b.PSA.034.005 ಅವರು ಆತನನ್ನು ದೃಷ್ಟಿಸಿ ಪ್ರಕಾಶ ಹೊಂದಿದರು. ಅವರ ಮುಖಗಳು ನಾಚಿಕೆಪಡಲಿಲ್ಲ.
34:6b.PSA.034.006 ಈ ಬಡವನು ಮೊರೆ ಯಿಡಲು; ಕರ್ತನು ಅದನ್ನು ಕೇಳಿ ಅವನ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವನನ್ನು ರಕ್ಷಿಸಿದನು.
34:7b.PSA.034.007 ಆತನಿಗೆ ಭಯಪಡುವವರ ಸುತ್ತಲೂ ಕರ್ತನ ದೂತನು ಇಳು ಕೊಂಡು ಅವರನ್ನು ಕಾಪಾಡುತ್ತಾನೆ.
34:8b.PSA.034.008 ಕರ್ತನು ಒಳ್ಳೆಯವನೆಂದು ರುಚಿಸಿ ನೋಡಿರಿ; ಆತನಲ್ಲಿ ಆಶ್ರ ಯಿಸಿಕೊಳ್ಳುವ ಮನುಷ್ಯನು ಧನ್ಯನು.
34:9b.PSA.034.009 ಆತನ ಪರಿ ಶುದ್ಧರೇ, ನೀವು ಕರ್ತನಿಗೆ ಭಯಪಡಿರಿ; ಆತನಿಗೆ ಭಯಪಡುವವರಿಗೆ ಏನೂ ಕೊರತೆ ಇಲ್ಲ.
34:10b.PSA.034.010 ಪ್ರಾಯದ ಸಿಂಹಗಳು ಕೊರತೆಯಾಗಿ ಹಸಿಯುತ್ತವೆ; ಆದರೆ ಕರ್ತನನ್ನು ಹುಡುಕುವವರು ಯಾವ ಒಳ್ಳೆಯ ದಕ್ಕಾದರೂ ಕೊರತೆ ಪಡುವದಿಲ್ಲ.
34:11b.PSA.034.011 ಮಕ್ಕಳೇ, ನೀವು ಬಂದು ನನ್ನ ಮಾತನ್ನು ಕೇಳಿರಿ; ನಾನು ಕರ್ತನ ಭಯವನ್ನು ನಿಮಗೆ ಕಲಿಸುವೆನು.
34:12b.PSA.034.012 ಒಳ್ಳೆಯದನ್ನು ನೋಡುವಂತೆ ದಿವಸಗಳನ್ನು ಪ್ರೀತಿ ಮಾಡಿ, ಜೀವವನ್ನು ಕೋರುವ ಮನುಷ್ಯನು ಯಾರು?
34:13b.PSA.034.013 ಕೇಡಿನಿಂದ ನಿನ್ನ ನಾಲಿಗೆಯನ್ನೂ ಮೋಸವನ್ನು ನುಡಿಯದ ಹಾಗೆ ನಿನ್ನ ತುಟಿಗಳನ್ನೂ ಕಾಯಿ.
34:14b.PSA.034.014 ಕೇಡಿನಿಂದ ತೊಲಗಿ ಒಳ್ಳೆಯದನ್ನು ಮಾಡು; ಸಮಾ ಧಾನವನ್ನು ಹುಡುಕಿ ಅದನ್ನು ಹಿಂಬಾಲಿಸು.
34:15b.PSA.034.015 ಕರ್ತನ ಕಣ್ಣುಗಳು ನೀತಿವಂತರ ಮೇಲೆಯೂ ಆತನ ಕಿವಿಗಳು ಅವರ ಮೊರೆಯ ಕಡೆಗೂ ಅವೆ.
34:16b.PSA.034.016 ಕೇಡನ್ನು ಮಾಡುವವರ ಜ್ಞಾಪಕವನ್ನು ಭೂಮಿ ಯೊಳಗಿಂದ ಕಡಿದುಹಾಕುವದಕ್ಕೆ ಕರ್ತನ ಮುಖವು ಅವರಿಗೆ ವಿರೋಧವಾಗಿದೆ.
34:17b.PSA.034.017 ನೀತಿವಂತರು ಕೂಗು ತ್ತಾರೆ; ಆಗ ಕರ್ತನು ಕೇಳಿ ಅವರ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವರನ್ನು ಬಿಡಿಸುತ್ತಾನೆ.
34:18b.PSA.034.018 ಮುರಿದ ಹೃದಯದವರಿಗೆ ಕರ್ತನು ಸವಿಾಪವಾಗಿದ್ದಾನೆ; ಜಜ್ಜಿದ ಆತ್ಮವನ್ನು ರಕ್ಷಿಸುತ್ತಾನೆ.
34:19b.PSA.034.019 ನೀತಿವಂತನಿಗೆ ಬರುವ ಕೇಡುಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಕರ್ತನು ಅವನನ್ನು ಬಿಡಿಸುತ್ತಾನೆ.
34:20b.PSA.034.020 ಆತನ ಎಲುಬು ಗಳನ್ನೆಲ್ಲಾ ಕಾಪಾಡುತ್ತಾನೆ; ಅವುಗಳಲ್ಲಿ ಒಂದಾದರೂ ಮುರಿಯಲ್ಪಡುವದಿಲ್ಲ.
34:21b.PSA.034.021 ಕೇಡು ದುಷ್ಟನನ್ನು ಕೊಲ್ಲು ವದು; ನೀತಿವಂತನನ್ನು ಹಗೆಮಾಡುವವರು ಹಾಳಾ ಗುವರು.ಕರ್ತನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ; ಆತನಲ್ಲಿ ಭರವಸವಿಡುವವರು ಹಾಳಾಗುವದಿಲ್ಲ.
34:22b.PSA.034.022 ಕರ್ತನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ; ಆತನಲ್ಲಿ ಭರವಸವಿಡುವವರು ಹಾಳಾಗುವದಿಲ್ಲ.
35
35:1b.PSA.035.001 ಓ ಕರ್ತನೇ, ನನ್ನ ಸಂಗಡ ವ್ಯಾಜ್ಯವಾಡುವವರೊಡನೆ ಸಂಗಡ ವ್ಯಾಜ್ಯವಾಡು; ನನಗೆ ವಿರೋಧವಾಗಿ ಯುದ್ಧಮಾಡುವವರ ಸಂಗಡ ಯುದ್ಧ ಮಾಡು.
35:2b.PSA.035.002 ಗುರಾಣಿಯನ್ನೂ ಖೇಡ್ಯವನ್ನೂ ಹಿಡು ಕೊಂಡು ನನ್ನ ಸಹಾಯಕ್ಕೆ ನಿಂತುಕೋ.
35:3b.PSA.035.003 ಭಲ್ಲೆ ಯನ್ನು ಹಿಡಿದು ನನ್ನನ್ನು ಹಿಂಸಿಸುವವರಿಗೆ ಎದುರಾಗಿ ಅಡ್ಡಗಟ್ಟಿ--ನಾನೇ ನಿನ್ನ ರಕ್ಷಣೆ ಎಂದು ನನ್ನ ಪ್ರಾಣಕ್ಕೆ ಹೇಳು.
35:4b.PSA.035.004 ನನ್ನ ಪ್ರಾಣವನ್ನು ಹುಡುಕುವವರು ನಾಚಿಕೆಪಟ್ಟು ಅವಮಾನ ಹೊಂದಲಿ; ನನಗೆ ಕೇಡನ್ನು ಕಲ್ಪಿಸುವವರು ಹಿಂದಿರುಗಿ ಲಜ್ಜೆಪಡಲಿ.
35:5b.PSA.035.005 ಅವರು ಗಾಳಿಯ ಮುಂದಿನ ಹೊಟ್ಟಿನ ಹಾಗೆ ಆಗಲಿ; ಕರ್ತನ ದೂತನು ಅವರನ್ನು ಹಿಂದಟ್ಟಲಿ, ಸೆಲಾ.
35:6b.PSA.035.006 ಅವರ ಮಾರ್ಗವು ಕತ್ತಲೆಯೂ ಜಾರಿಕೆಯೂ ಆಗಲಿ; ಕರ್ತನ ದೂತನು ಅವರನ್ನು ಹಿಂಸಿಸಲಿ.
35:7b.PSA.035.007 ಕಾರಣವಿಲ್ಲದೆ ಅವರು ನನಗೋಸ್ಕರ ತಮ್ಮ ಬಲೆಯನ್ನು ಕುಣಿಯಲ್ಲಿ ಅಡಗಿಸಿಟ್ಟಿದ್ದಾರೆ; ಕಾರಣವಿಲ್ಲದೆ ನನ್ನ ಪ್ರಾಣಕೋಸ್ಕರ ಅದನ್ನು ಅಗೆದಿದ್ದಾರೆ.
35:8b.PSA.035.008 ನಾಶನವು ಅವನಿಗೆ ತಿಳಿಯದೆ ಬರಲಿ; ಅವನು ಅಡಗಿಸಿಟ್ಟ ಬಲೆಯು ಅವನನ್ನೇ ಹಿಡಿಯಲಿ; ಅಂಥಾ ನಾಶನಕ್ಕಾಗಿ ಅವನು ಅದರಲ್ಲಿಯೇ ಬೀಳಲಿ,
35:9b.PSA.035.009 ಆದರೆ ನನ್ನ ಪ್ರಾಣವು ಕರ್ತನಲ್ಲಿ ಉಲ್ಲಾಸಿಸಿ ಆತನ ರಕ್ಷಣೆ ಯಲ್ಲಿ ಸಂತೋಷಿಸುವದು.
35:10b.PSA.035.010 ಕರ್ತನೇ, ಬಡವನನ್ನು ಅವನಿಗಿಂತ ಬಲಿಷ್ಠರಿಂದ ಹೌದು, ದರಿದ್ರರನ್ನೂ ಕೊರತೆಯುಳ್ಳವರನ್ನೂ ಸುಲುಕೊಳ್ಳುವವನಿಂದ ಬಿಡಿ ಸುವವನಾದ ನಿನ್ನ ಹಾಗೆ ಯಾರು ಎಂದು ನನ್ನ ಎಲು ಬುಗಳೆಲ್ಲಾ ಹೇಳುವವು.
35:11b.PSA.035.011 ಸುಳ್ಳು ಸಾಕ್ಷಿಗಳು ಎದ್ದು ನಾನು ತಿಳಿಯದವುಗಳನ್ನು ನನ್ನ ಮೇಲೆ ಹೊರಿಸಿ ದರು.
35:12b.PSA.035.012 ನನ್ನ ಪ್ರಾಣವನ್ನು ಕೆಡಿಸುವದಕ್ಕೆ ಮೇಲಿಗೆ ಬದಲಾಗಿ ಕೇಡನ್ನು ನನಗೆ ಮಾಡಿದರು.
35:13b.PSA.035.013 ನಾನಾ ದರೋ ಅವರು ಅಸ್ವಸ್ಥವಾದಾಗ, ಗೋಣೀ ತಟ್ಟು ಹೊದ್ದುಕೊಂಡು ನನ್ನ ಪ್ರಾಣವನ್ನು ಉಪವಾಸದಿಂದ ಕುಂದಿಸಿದೆನು; ನನ್ನ ಪ್ರಾರ್ಥನೆಯು ನನ್ನ ಎದೆಗೆ ತಿರುಗಿತು.
35:14b.PSA.035.014 ಅವನು ನನಗೆ ಸ್ನೇಹಿತನೂ ಇಲ್ಲವೆ ಸಹೋದರನೂ ಆದ ಹಾಗೆ ನಡೆದುಕೊಂಡೆನು; ತಾಯಿಗಾಗಿ ದುಃಖಪಡುವವನ ಹಾಗೆ ಭಾರವುಳ್ಳವ ನಾಗಿ ಬೊಗ್ಗಿಕೊಂಡೆನು.
35:15b.PSA.035.015 ನನ್ನ ಆಪತ್ತಿನಲ್ಲಿ ಅವರು ಸಂತೋಷಪಟ್ಟು ಕೂಡಿಕೊಂಡರು; ಹೌದು, ನಾನರಿ ಯದ ದೂಷಕರು ನನಗೆ ವಿರೋಧವಾಗಿ ಕೂಡಿ ಕೊಂಡರು; ಸುಮ್ಮನಿರದೆ ನನ್ನನ್ನು ಸುಲುಕೊಂಡರು.
35:16b.PSA.035.016 ಔತಣಗಳಲ್ಲಿ ಗೇಲಿಮಾಡುವ ಕಪಟಿಗಳ ಸಂಗಡ ನನ್ನ ಮೇಲೆ ತಮ್ಮ ಹಲ್ಲುಗಳನ್ನು ಕಡಿಯುತ್ತಾರೆ.
35:17b.PSA.035.017 ಕರ್ತನೇ, ಎಷ್ಟರ ವರೆಗೆ ನೀನು ನೋಡುವಿ? ಅವರ ನಾಶನಗಳಿಂದಲೂ ಸಿಂಹಗಳಿಂದಲೂ ನನ್ನ ಪ್ರಿಯವಾದ ಪ್ರಾಣವನ್ನು ತಪ್ಪಿಸು.
35:18b.PSA.035.018 ಮಹಾಸಭೆ ಯಲ್ಲಿ ನಿನ್ನನ್ನು ಕೊಂಡಾಡುವೆನು; ಬಹುಜನರಲ್ಲಿ ನಿನ್ನನ್ನು ಸ್ತುತಿಸುವೆನು.
35:19b.PSA.035.019 ನನ್ನ ಶತ್ರುಗಳು ನನ್ನ ವಿಷ ಯದಲ್ಲಿ ಸುಳ್ಳಾಗಿ ಸಂತೋಷಪಡದೆ ಇರಲಿ; ಇಲ್ಲವೆ ನನ್ನನ್ನು ಕಾರಣವಿಲ್ಲದೆ ಹಗೆಮಾಡುವವರು ಕಣ್ಣು ಸನ್ನೆಮಾಡದೆ ಇರಲಿ.
35:20b.PSA.035.020 ಅವರು ಅಸಮಾಧಾನವಾಗಿ ಮಾತನಾಡಿ ದೇಶದಲ್ಲಿರುವ ಶಾಂತರ ಮೇಲೆ ಮೋಸದ ವಿಷಯಗಳನ್ನು ಕಲ್ಪಿಸುತ್ತಾರೆ.
35:21b.PSA.035.021 ಹೌದು, ನನಗೆ ವಿರೋಧವಾಗಿ ತಮ್ಮ ಬಾಯನ್ನು ಅಗಲ ಮಾಡಿ--ಆಹಾ, ಆಹಾ ನಮ್ಮ ಕಣ್ಣು ಅದನ್ನು ನೋಡಿತು ಅನ್ನುತ್ತಾರೆ.
35:22b.PSA.035.022 ಓ ಕರ್ತನೇ, ನೀನು ಇದನ್ನು ನೋಡಿದ್ದೀ; ಸುಮ್ಮನಿರಬೇಡ, ಓ ಕರ್ತನೇ, ನನಗೆ ದೂರವಾಗಿರ ಬೇಡ.
35:23b.PSA.035.023 ನನ್ನ ದೇವರೇ, ಕರ್ತನೇ, ನನ್ನ ನ್ಯಾಯಕ್ಕೂ ನನ್ನ ವ್ಯಾಜ್ಯಕ್ಕೂ ಎಚ್ಚರವಾಗಿ ಉದ್ರೇಕಗೊಳ್ಳು.
35:24b.PSA.035.024 ಓ ಕರ್ತನೇ, ನನ್ನ ದೇವರೇ, ನಿನ್ನ ನೀತಿಯ ಪ್ರಕಾರ ನನಗೆ ನ್ಯಾಯತೀರಿಸು; ಅವರು ನನ್ನ ವಿಷಯವಾಗಿ ಸಂತೋಷಪಡದೆ ಇರಲಿ.
35:25b.PSA.035.025 ಅವರು ತಮ್ಮ ಹೃದಯ ದಲ್ಲಿ--ಹಾ, ನಮ್ಮ ಇಷ್ಟವೇ ನೆರವೇರಿತು ಎಂದು ಹೇಳದಿರಲಿ. ಅವನನ್ನು ನುಂಗಿ ಬಿಟ್ಟೆವೆಂದೂ ಅವರು ಹೇಳದೆ ಇರಲಿ;
35:26b.PSA.035.026 ನನ್ನ ಕೇಡಿನಲ್ಲಿ ಸಂತೋಷ ಪಡುವವರು ಕೂಡ ನಾಚಿಕೊಂಡು ಒಟ್ಟಿಗೆ ಗಲಿಬಿಲಿ ಯಾಗಿಲಿ, ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಳ್ಳುವವರು ನಾಚಿಕೆಯನ್ನೂ ಅವಮಾನವನ್ನೂ ಹೊದ್ದುಕೊಳ್ಳಲಿ.
35:27b.PSA.035.027 ನನ್ನ ನೀತಿಯಲ್ಲಿ ಸಂತೋಷ ಪಡುವವರು ಉತ್ಸಾಹಧ್ವನಿಮಾಡಿ ಆನಂದಪಡಲಿ; ಹೌದು, ತನ್ನ ಸೇವಕನ ಅಭಿವೃದ್ಧಿಯಲ್ಲಿ ಸಂತೋ ಷಪಡುವ ಕರ್ತನು ಮಹಿಮೆಹೊಂದಲಿ ಎಂದು ಅವರು ಯಾವಾಗಲೂ ಹೇಳಲಿ.ಆಗ ನನ್ನ ನಾಲಿ ಗೆಯು ನಿನ್ನ ನೀತಿಯನ್ನೂ ಸ್ತೋತ್ರವನ್ನೂ ದಿನವೆಲ್ಲಾ ಉಚ್ಚರಿಸುವದು.
35:28b.PSA.035.028 ಆಗ ನನ್ನ ನಾಲಿ ಗೆಯು ನಿನ್ನ ನೀತಿಯನ್ನೂ ಸ್ತೋತ್ರವನ್ನೂ ದಿನವೆಲ್ಲಾ ಉಚ್ಚರಿಸುವದು.
36
36:1b.PSA.036.001 ಪಾಪವು ದುಷ್ಟನ ಮನಸ್ಸಿನೊಳಗೆ ನುಡಿಯುತ್ತಿರುವದರಿಂದ ಅವನ ಕಣ್ಣೆದು ರಿಗೆ ದೇವರ ಭಯವೇ ಇಲ್ಲ.
36:2b.PSA.036.002 ಹಗೆಗೆ ತಕ್ಕ ತನ್ನ ಅಕ್ರಮವನ್ನು ಕಂಡುಕೊಳ್ಳುವವರೆಗೆ ಅವನು ತನ್ನನ್ನು ತಾನೇ ಹೊಗಳಿಕೊಳ್ಳುತ್ತಾನೆ.
36:3b.PSA.036.003 ಅವನ ಬಾಯಿಯ ಮಾತುಗಳು ಅಕ್ರಮವೂ ಮೋಸವೂ ಆಗಿವೆ; ಬುದ್ಧಿ ಯಿಂದ ನಡೆಯುವದನ್ನೂ ಒಳ್ಳೇದು ಮಾಡುವದನ್ನೂ ಬಿಟ್ಟಿದ್ದಾನೆ.
36:4b.PSA.036.004 ಕುಯುಕ್ತಿಯನ್ನು ತನ್ನ ಹಾಸಿಗೆಯ ಮೇಲೆ ಕಲ್ಪಿಸುತ್ತಾನೆ; ಒಳ್ಳೇದಲ್ಲದ ಮಾರ್ಗದಲ್ಲಿ ನಿಂತು ಕೊಳ್ಳುತ್ತಾನೆ; ಕೆಟ್ಟದ್ದನ್ನು ಅಸಹ್ಯಿಸುವದಿಲ್ಲ.
36:5b.PSA.036.005 ಓ ಕರ್ತನೇ, ಆಕಾಶದಲ್ಲಿ ನಿನ್ನ ಕರುಣೆಯು ಅದೆ; ನಿನ್ನ ನಂಬಿಗಸ್ತಿಕೆಯು ಮೇಘಗಳ ವರೆಗೆ ಮುಟ್ಟಿದೆ.
36:6b.PSA.036.006 ನಿನ್ನ ನೀತಿಯು ದೊಡ್ಡ ಪರ್ವತಗಳ ಹಾಗಿದೆ; ನಿನ್ನ ನ್ಯಾಯತೀರ್ಪುಗಳು ಮಹಾ ಅಗಾಧವೇ. ಓ ಕರ್ತನೇ, ಮನುಷ್ಯರನ್ನೂ ಮೃಗಗಳನ್ನೂ ಸಂರಕ್ಷಿಸುತ್ತೀ.
36:7b.PSA.036.007 ಓ ದೇವರೇ, ನಿನ್ನ ಪ್ರೀತಿ ಕರುಣೆಯು ಎಷ್ಟೋ ಶ್ರೇಷ್ಠ ವಾದದ್ದು! ಮನುಷ್ಯನ ಮಕ್ಕಳು ನಿನ್ನ ರೆಕ್ಕೆಗಳ ನೆರಳಿನಲ್ಲಿ ಭರವಸೆ ಇಡುತ್ತಾರೆ.
36:8b.PSA.036.008 ನಿನ್ನ ಆಲಯದ ಪರಿಪೂರ್ಣತೆಯಿಂದ ಅವರು ಸಂತೃಪ್ತಿಯಾಗುವರು; ನಿನ್ನ ಸಂಭ್ರಮದ ನದಿಯಿಂದ ಅವರಿಗೆ ಕುಡಿಯ ಮಾಡುವಿ.
36:9b.PSA.036.009 ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟು. ನಿನ್ನ ತೇಜಸ್ಸಿನ ಬೆಳಕನ್ನು ನೋಡುವೆವು.
36:10b.PSA.036.010 ನಿನ್ನನ್ನು ತಿಳಿದವರಿಗೆ ನಿನ್ನ ಕೃಪೆಯನ್ನೂ ಯಥಾರ್ಥ ಹೃದಯದವರಿಗೆ ನಿನ್ನ ನೀತಿಯನ್ನೂ ನೆಲೆಯಾಗಿರಿಸು.
36:11b.PSA.036.011 ಗರ್ವದ ಪಾದ ನನಗೆ ವಿರೋಧ ವಾಗಿ ಬಾರದೆ ಇರಲಿ; ದುಷ್ಟರ ಕೈ ನನ್ನನ್ನು ತೆಗೆದು ಹಾಕದಿರಲಿ.ಅಲ್ಲಿ ಅಕ್ರಮ ಮಾಡುವವರು ಬಿದ್ದಿದ್ದಾರೆ; ಅವರು ಕೆಳಗೆ ಹಾಕಲ್ಪಟ್ಟು ಏಳಲಾರದೆ ಇದ್ದಾರೆ.
36:12b.PSA.036.012 ಅಲ್ಲಿ ಅಕ್ರಮ ಮಾಡುವವರು ಬಿದ್ದಿದ್ದಾರೆ; ಅವರು ಕೆಳಗೆ ಹಾಕಲ್ಪಟ್ಟು ಏಳಲಾರದೆ ಇದ್ದಾರೆ.
37
37:1b.PSA.037.001 ದುರ್ಮಾರ್ಗಿಗಳಿಗೋಸ್ಕರ ಕೋಪಿಸಿ ಕೊಳ್ಳಬೇಡ; ಇಲ್ಲವೆ ನೀನು ಅಕ್ರಮ ಮಾಡುವವರಿಗೆ ವಿರೋಧವಾಗಿ ಹೊಟ್ಟೇಕಿಚ್ಚು ಪಡ ಬೇಡ.
37:2b.PSA.037.002 ಅವರು ಹುಲ್ಲಿನ ಹಾಗೆ ಬೇಗ ಕೊಯ್ಯಲ್ಪಟ್ಟು ಹಸುರಾದ ಸೊಪ್ಪಿನ ಹಾಗೆ ಬಾಡಿಹೋಗುವರು.
37:3b.PSA.037.003 ಕರ್ತನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ನಿಜವಾಗಿ ತೃಪ್ತಿ ಹೊಂದು ವಿ.
37:4b.PSA.037.004 ಕರ್ತನಲ್ಲಿ ಆನಂದವಾಗಿರು; ಆಗ ಆತನು ನಿನ್ನ ಹೃದಯದ ಅಪೇಕ್ಷೆಗಳನ್ನು ನಿನಗೆ ಕೊಡುವನು.
37:5b.PSA.037.005 ನಿನ್ನ ಮಾರ್ಗವನ್ನು ಕರ್ತನಿಗೆ ಒಪ್ಪಿಸು; ಆತನಲ್ಲಿ ಭರವಸ ವಿಡು; ಆತನು ಅದನ್ನು ನೆರವೇರಿಸುವನು.
37:6b.PSA.037.006 ನಿನ್ನ ನೀತಿಯನ್ನು ಬೆಳಕಿನ ಹಾಗೆಯೂ ನಿನ್ನ ನ್ಯಾಯಗಳನ್ನು ಮಧ್ಯಾಹ್ನದ ಹಾಗೆಯೂ ಆತನು ಹೊರಗೆ ಬರ ಮಾಡುವನು.
37:7b.PSA.037.007 ಕರ್ತನಲ್ಲಿ ಶಾಂತವಾಗಿರು; ಮೌನವಾಗಿದ್ದು ಆತನಿಗಾಗಿ ಎದುರುನೋಡು; ತನ್ನ ಮಾರ್ಗದಲ್ಲಿ ಸಫಲ ವಾಗುವವನಿಗೋಸ್ಕರವೂ ಯುಕ್ತಿಗಳನ್ನು ನಡಿಸುವ ಮನುಷ್ಯರಿಗೋಸ್ಕರವೂ ಕೋಪಮಾಡಿಕೊಳ್ಳಬೇಡ.
37:8b.PSA.037.008 ಕೋಪವನ್ನು ನಿಲ್ಲಿಸು; ಉರಿಯನ್ನು ಬಿಟ್ಟುಬಿಡು; ಹೇಗಾದರೂ ಕೇಡುಮಾಡದ ಹಾಗೆ ಕೋಪಿಸಿಕೊಳ್ಳ ಬೇಡ.
37:9b.PSA.037.009 ದುರ್ಮಾರ್ಗಿಗಳು ಕಡಿದು ಹಾಕಲ್ಪಡುವರು; ಕರ್ತನನ್ನು ನಿರೀಕ್ಷಿಸುವವರೇ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳುವರು.
37:10b.PSA.037.010 ಇನ್ನು ಸ್ಪಲ್ಪ ಸಮಯದಲ್ಲಿ ದುಷ್ಟನು ಇರನು; ಹೌದು, ಅವನ ಸ್ಥಳವನ್ನು ನೀನು ಜಾಗ್ರತೆಯಾಗಿ ವಿಚಾರಿಸಿದರೂ ಇಗೋ, ಅದು ಇರು ವದಿಲ್ಲ.
37:11b.PSA.037.011 ಆದರೆ ಸಾತ್ವಿಕರು ಭೂಮಿಯನ್ನು ಸ್ವಾಧೀನ ಮಾಡಿಕೊಂಡು ಬಹಳ ಸಮಾಧಾನದಲ್ಲಿ ಆನಂದ ಪಡುವರು.
37:12b.PSA.037.012 ದುಷ್ಟನು ನೀತಿವಂತನಿಗಾಗಿ ಹೊಂಚುಹಾಕು ವನು, ಅವನ ಮೇಲೆ ತನ್ನ ಹಲ್ಲುಗಳನ್ನು ಕಡಿಯುತ್ತಾನೆ.
37:13b.PSA.037.013 ಕರ್ತನು ಅವನ ದಿನ ಬರುತ್ತದೆಂದು ನೋಡಿ ನಗುತ್ತಾನೆ.
37:14b.PSA.037.014 ದುಷ್ಟರು ಬಡವನನ್ನು ಮತ್ತು ದೀನ ನನ್ನು ಕೆಡವಿಬಿಡುವದಕ್ಕೂ ಸನ್ಮಾರ್ಗದವರನ್ನು ಕೊಲ್ಲು ವದಕ್ಕೂ ಕತ್ತಿಯನ್ನು ಹಿರಿದಿದ್ದಾರೆ ಮತ್ತು ತಮ್ಮ ಬಿಲ್ಲು ಗಳನ್ನು ಬೊಗ್ಗಿಸಿದ್ದಾರೆ.
37:15b.PSA.037.015 ಅವರ ಕತ್ತಿಯು ಅವರ ಹೃದಯವನ್ನೇ ಇರಿಯುವದು; ಅವರ ಬಿಲ್ಲುಗಳು ಮುರಿದುಹೋಗುವವು.
37:16b.PSA.037.016 ನೀತಿವಂತನಿಗಿರುವ ಸ್ವಲ್ಪ ವಾದದ್ದು ಅನೇಕ ದುಷ್ಟರ ಐಶ್ವರ್ಯಕ್ಕಿಂತಲೂ ಶ್ರೇಷ್ಠ ವಾಗಿದೆ.
37:17b.PSA.037.017 ದುಷ್ಟರ ತೋಳುಗಳು ಮುರಿದು ಹೋಗು ವವು; ಆದರೆ ನೀತಿವಂತರನ್ನು ಕರ್ತನು ಉದ್ಧಾರ ಮಾಡುತ್ತಾನೆ.
37:18b.PSA.037.018 ಕರ್ತನು ಯಥಾರ್ಥರ ದಿನಗಳನ್ನು ಅರಿತಿದ್ದಾನೆ; ಅವರ ಬಾಧ್ಯತೆಯು ಯುಗಯುಗಕ್ಕೂ ಇರುವದು.
37:19b.PSA.037.019 ವಿಪತ್ಕಾಲದಲ್ಲಿ ಅವರು ಆಶಾಭಂಗ ಪಡುವದಿಲ್ಲ; ಕ್ಷಾಮದ ದಿವಸಗಳಲ್ಲಿ ತೃಪ್ತಿಪಡುವರು.
37:20b.PSA.037.020 ದುಷ್ಟರು ನಾಶವಾಗುವರು; ಕರ್ತನ ಶತ್ರುಗಳು ಕುರಿಮರಿಗಳ ಕೊಬ್ಬಿನ ಹಾಗೆ ಇದ್ದು ಕರಗಿಹೋಗು ವರು; ಹೊಗೆಯಲ್ಲಿ ಕರಗಿಹೋಗುವರು.
37:21b.PSA.037.021 ದುಷ್ಟನು ಸಾಲಮಾಡಿ ತಿರಿಗಿ ಸಲ್ಲಿಸುವದಿಲ್ಲ; ನೀತಿವಂತನು ದಯಾಳುವಾಗಿ ಕೊಡುತ್ತಾನೆ.
37:22b.PSA.037.022 ಆತನು ಆಶೀರ್ವದಿಸಿದವರು ಭೂಮಿಯನ್ನು ಸ್ವತಂತ್ರಿಸಿ ಕೊಳ್ಳುವರು; ಆತನು ಶಪಿಸಿದವರು ಕಡಿದು ಹಾಕಲ್ಪಡವರು.
37:23b.PSA.037.023 ಒಳ್ಳೇ ಮನುಷ್ಯನ ಹೆಜ್ಜೆಗಳು ಕರ್ತನಿಂದ ದೃಢ ವಾಗುತ್ತವೆ; ಆತನು ಅವನ ಮಾರ್ಗದಲ್ಲಿ ಸಂತೋಷ ಪಡುತ್ತಾನೆ.
37:24b.PSA.037.024 ಅವನು ಬಿದ್ದು ಹೋದಾಗ್ಯೂ ಪೂರ್ಣ ವಾಗಿ ಕೆಡವಲ್ಪಡುವದಿಲ್ಲ. ಯಾಕಂದರೆ ಕರ್ತನು ತನ್ನ ಕೈಯಿಂದ ಅವನನ್ನು ಮೇಲೆ ಎತ್ತುತ್ತಾನೆ.
37:25b.PSA.037.025 ನಾನು ಬಾಲಕನಾಗಿದ್ದೆನು, ಈಗ ಮುದುಕನಾಗಿದ್ದೇನೆ; ಆದರೆ ನೀತಿವಂತನು ಕೈಬಿಡಲ್ಪಟ್ಟದ್ದನ್ನೂ ಅವನ ಸಂತತಿಯು ರೊಟ್ಟಿಗಾಗಿ ಭಿಕ್ಷೆಬೇಡುವದನ್ನೂ ನಾನು ನೋಡಲಿಲ್ಲ.
37:26b.PSA.037.026 ಅವನು ಯಾವಾಗಲೂ ದಯಾಳುವಾಗಿ ಸಾಲ ಕೊಡುತ್ತಾನೆ; ಅವನ ಸಂತತಿಯು ಆಶೀರ್ವಾದ ಹೊಂದುವದು.
37:27b.PSA.037.027 ಕೇಡಿನಿಂದ ತೊಲಗಿ ಒಳ್ಳೇದನ್ನು ಮಾಡು, ಆಗ ಯುಗಯುಗಕ್ಕೂ ವಾಸಮಾಡುವಿ.
37:28b.PSA.037.028 ಕರ್ತನು ನ್ಯಾಯವನ್ನು ಪ್ರೀತಿಮಾಡುತ್ತಾನೆ; ತನ್ನ ಪರಿಶುದ್ಧರನ್ನು ತೊರೆದುಬಿಡನು; ಅವರು ಯುಗ ಯುಗಕ್ಕೂ ಕಾಪಾಡಲ್ಪಡುವರು; ಆದರೆ ದುಷ್ಟರ ಸಂತತಿಯು ಕಡಿದುಹಾಕಲ್ಪಡುವದು.
37:29b.PSA.037.029 ನೀತಿವಂತರು ಭೂಮಿಯನ್ನು ಸ್ವಾಧೀನಮಾಡಿಕೊಂಡು ಎಂದೆಂದಿಗೂ ಅದರಲ್ಲಿ ವಾಸವಾಗಿರುವರು.
37:30b.PSA.037.030 ನೀತಿವಂತನ ಬಾಯಿ ಜ್ಞಾನವನ್ನು ಉಚ್ಚರಿಸುವದು; ಅವನ ನಾಲಿಗೆ ನ್ಯಾಯ ವನ್ನು ನುಡಿಯುವದು.
37:31b.PSA.037.031 ದೇವರ ನ್ಯಾಯ ಪ್ರಮಾ ಣವು ಅವನ ಹೃದಯದಲ್ಲಿ ಅದೆ; ಅವನ ಹೆಜ್ಜೆಗಳು ಕದಲುವದಿಲ್ಲ.
37:32b.PSA.037.032 ದುಷ್ಟನು ನೀತಿವಂತನಿಗಾಗಿ ಹೊಂಚು ಹಾಕು ತ್ತಾನೆ. ಅವನನ್ನು ಕೊಲ್ಲಲು ಹುಡುಕುತ್ತಾನೆ.
37:33b.PSA.037.033 ಕರ್ತನು ಅವನನ್ನು ದುಷ್ಟನ ಕೈಯಲ್ಲಿ ಬಿಡುವದಿಲ್ಲ; ಇಲ್ಲವೆ ನ್ಯಾಯವಿಚಾರಣೆಯಲ್ಲಿ ಅವನು ದುಷ್ಟನೆಂದು ತೀರ್ಪು ಹೊಂದುವದಿಲ್ಲ.
37:34b.PSA.037.034 ಕರ್ತನನ್ನು ನಿರೀಕ್ಷಿಸು, ಆತನ ಮಾರ್ಗವನ್ನು ಕೈಕೊಳ್ಳು; ಆಗ ಭೂಮಿಯನ್ನು ಸ್ವಾಧೀ ನಮಾಡಿಕೊಳ್ಳುವ ಹಾಗೆ ನಿನ್ನನ್ನು ಆತನು ಎತ್ತು ವನು; ದುಷ್ಟರು ಕಡಿದುಹಾಕಲ್ಪಟ್ಟಾಗ ನೀನು ಅದನ್ನು ನೋಡುವಿ.
37:35b.PSA.037.035 ದುಷ್ಟನು ದೊಡ್ಡ ಅಧಿಕಾರದಲ್ಲಿರು ವದನ್ನು ನಾನು ನೋಡಿದೆನು; ಅವನು ಹಸುರಾಗಿ ವಿಸ್ತರಿಸಿಕೊಂಡ ಮರದ ಹಾಗೆ ಇದ್ದನು.
37:36b.PSA.037.036 ಆದರೆ ಅವನು ಅಳಿದು ಹೋದನು; ಇಗೋ, ಅವನು ಇಲ್ಲವಾದನು; ಹೌದು, ಅವನನ್ನು ನಾನು ಹುಡು ಕಿದೆನು; ಆದರೆ ಅವನು ಸಿಕ್ಕಲಿಲ್ಲ.
37:37b.PSA.037.037 ಸಂಪೂರ್ಣನನ್ನು ಗಮನಿಸು, ಯಥಾರ್ಥನನ್ನು ನೋಡು; ಆ ಮನುಷ್ಯನ ಅಂತ್ಯವು ಸಮಾಧಾನವಾಗಿದೆ.
37:38b.PSA.037.038 ಅಪರಾಧಿಗಳು ಏಕ ವಾಗಿ ನಾಶವಾಗುವರು; ದುಷ್ಟರ ಅಂತ್ಯವು ತೆಗೆದು ಹಾಕಲ್ಪಡುವದು.
37:39b.PSA.037.039 ನೀತಿವಂತರ ರಕ್ಷಣೆಯು ಕರ್ತ ನಿಂದಲೇ; ಇಕ್ಕಟ್ಟಿನ ಕಾಲದಲ್ಲಿ ಅವರ ಬಲವು ಆತನೇ.ಕರ್ತನು ಅವರಿಗೆ ಸಹಾಯಮಾಡಿ ಅವರನ್ನು ತಪ್ಪಿಸುವನು; ದುಷ್ಟರಿಂದ ಅವರನ್ನು ತಪ್ಪಿಸಿ ರಕ್ಷಿಸುವನು; ಅವರು ಆತನಲ್ಲಿ ಭರವಸವಿಟ್ಟಿದ್ದಾರೆ.
37:40b.PSA.037.040 ಕರ್ತನು ಅವರಿಗೆ ಸಹಾಯಮಾಡಿ ಅವರನ್ನು ತಪ್ಪಿಸುವನು; ದುಷ್ಟರಿಂದ ಅವರನ್ನು ತಪ್ಪಿಸಿ ರಕ್ಷಿಸುವನು; ಅವರು ಆತನಲ್ಲಿ ಭರವಸವಿಟ್ಟಿದ್ದಾರೆ.
38
38:1b.PSA.038.001 ಓ ಕರ್ತನೇ, ನಿನ್ನ ರೌದ್ರದಿಂದ ನನ್ನನ್ನು ಗದರಿಸಬೇಡ; ನಿನ್ನ ರೋಷದಿಂದ ನನ್ನನ್ನು ಶಿಕ್ಷಿಸಬೇಡ.
38:2b.PSA.038.002 ನಿನ್ನ ಬಾಣಗಳು ನನ್ನಲ್ಲಿ ಬಲವಾಗಿ ನೆಟ್ಟಿವೆ; ನಿನ್ನ ಕೈ ನನ್ನ ಮೇಲೆ ಭಾರವಾಗಿದೆ.
38:3b.PSA.038.003 ನಿನ್ನ ಕೋಪದ ನಿಮಿತ್ತವಾಗಿ ನನ್ನ ಶರೀರದಲ್ಲಿ ಸ್ವಸ್ಥವೇನೂ ಇಲ್ಲ; ನನ್ನ ಪಾಪದ ನಿಮಿತ್ತ ನನ್ನ ಎಲುಬುಗಳಲ್ಲಿ ವಿಶ್ರಾಂತಿಯೇ ಇಲ್ಲ.
38:4b.PSA.038.004 ನನ್ನ ಅಕ್ರಮಗಳು ನನ್ನ ತಲೆಯ ಮೇಲೆ ಏರಿಹೋಗಿವೆ; ಭಾರವಾದ ಹೊರೆಯ ಹಾಗೆ ನನಗೆ ವಿಾರಿದ ಭಾರವಾಗಿವೆ.
38:5b.PSA.038.005 ನನ್ನ ಬಾಸುಂಡೆಗಳು ನನ್ನ ಮೂಢತ್ವದ ನಿಮಿತ್ತ ನಾರುತ್ತಾ ಕೀವು ತುಂಬಿ ಅವೆ.
38:6b.PSA.038.006 ನಾನು ಕುಗ್ಗಿದ್ದೇನೆ, ಬಹಳವಾಗಿ ಬೊಗ್ಗಿದ್ದೇನೆ; ದಿನವೆಲ್ಲಾ ದುಃಖವುಳ್ಳವನಾಗಿ ತಿರುಗಾಡುತ್ತೇನೆ.
38:7b.PSA.038.007 ನನ್ನ ನಡುವು ಉರಿಯಿಂದ ತುಂಬಿದೆ; ನನ್ನ ಮಾಂಸದಲ್ಲಿ ಸ್ವಸ್ಥವೇನೂ ಇಲ್ಲ.
38:8b.PSA.038.008 ನಾನು ಬಹಳವಾಗಿ ಜಜ್ಜಲ್ಪಟ್ಟು ಬಲಹೀನನಾಗಿದ್ದೇನೆ; ನನ್ನ ಹೃದಯದ ನರಳುವಿಕೆ ಯಿಂದ ಮೂಲ್ಗುತ್ತೇನೆ.
38:9b.PSA.038.009 ಕರ್ತನೇ, ನನ್ನ ಆಶೆಯೆಲ್ಲಾ ನಿನ್ನ ಮುಂದೆ ಇದೆ; ನನ್ನ ನಿಟ್ಟುಸಿರು ನಿನಗೆ ಮರೆಯಾದದ್ದಲ್ಲ.
38:10b.PSA.038.010 ನನ್ನ ಹೃದಯವು ಬಡಿದುಕೊಳ್ಳುತ್ತದೆ; ನನ್ನ ಶಕ್ತಿಯು ನನ್ನನ್ನು ಬಿಟ್ಟು ಹೋಗಿದೆ; ನನ್ನ ಕಣ್ಣುಗಳ ಬೆಳಕು ಸಹ ನನ್ನಲ್ಲಿ ಇಲ್ಲ.
38:11b.PSA.038.011 ನನ್ನ ಪ್ರಿಯರೂ ಸ್ನೇಹಿತರೂ ನನ್ನ ಹುಣ್ಣನ್ನು ನೋಡಿ ಓರೆಯಾಗಿ ನಿಲ್ಲುತ್ತಾರೆ; ನನ್ನ ನೆರೆಯವರು ದೂರದಲ್ಲಿ ನಿಂತಿದ್ದಾರೆ.
38:12b.PSA.038.012 ನನ್ನ ಪ್ರಾಣವನ್ನು ಹುಡುಕುವವರು ಬಲೆ ಒಡ್ಡುತ್ತಾರೆ; ನನ್ನ ಕೇಡನ್ನು ಹುಡುಕುವವರು ಕೇಡಿನ ಮಾತುಗಳನ್ನಾಡುತ್ತಾರೆ; ದಿನವೆಲ್ಲಾ ಮೋಸಗಳನ್ನು ಕಲ್ಪಿಸುತ್ತಾರೆ.
38:13b.PSA.038.013 ಆದರೆ ನಾನು ಕಿವುಡನ ಹಾಗೆ ಕೇಳಿಸಿಕೊಳ್ಳಲಿಲ್ಲ; ತನ್ನ ಬಾಯನ್ನು ತೆರೆಯದ ಮೂಕನ ಹಾಗೆ ನಾನಿದ್ದೆನು.
38:14b.PSA.038.014 ನಾನು ಕಿವಿ ಕೇಳಿಸದವನಂತೆಯೂ ಪ್ರತ್ತ್ಯುತ್ತರ ಕೊಡಲಾರದವನಂತೆಯೂ ಆದೆನು.
38:15b.PSA.038.015 ಓ ಕರ್ತನೇ, ನಿನ್ನನ್ನು ನಿರೀಕ್ಷಿಸುತ್ತೇನೆ; ನನ್ನ ದೇವರಾದ ಓ ಕರ್ತನೇ, ನೀನು ಉತ್ತರ ಕೊಡುವಿ.
38:16b.PSA.038.016 ಅವರು ನನ್ನ ವಿಷಯದಲ್ಲಿ ಸಂತೋಷಪಡದಿರಲಿ ಎಂದು ನಾನು ಅಂದುಕೊಂಡೆನು; ನನ್ನ ಪಾದ ಜಾರು ವಾಗ ಅವರು ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಳ್ಳುತ್ತಾರೆ.
38:17b.PSA.038.017 ನಾನು ಕೆಡಲ್ಪಡುವ ಸ್ಥಿತಿಯಲ್ಲಿದ್ದೇನೆ; ನನ್ನ ವ್ಯಸನವು ಯಾವಾಗಲೂ ನನ್ನ ಮುಂದೆ ಅದೆ.
38:18b.PSA.038.018 ನನ್ನ ಅಕ್ರಮವನ್ನು ತಿಳಿಸುವೆನು; ನನ್ನ ಪಾಪಕ್ಕೋಸ್ಕರ ದುಃಖಪಡುವೆನು.
38:19b.PSA.038.019 ಆದರೆ ನನ್ನ ಶತ್ರುಗಳು ಚುರು ಕಾಗಿ ಬಲವಾಗಿದ್ದಾರೆ; ನನ್ನನ್ನು ತಪ್ಪಾಗಿ ಹಗೆಮಾಡು ವವರು ಹೆಚ್ಚಿದ್ದಾರೆ.
38:20b.PSA.038.020 ಒಳ್ಳೇದಕ್ಕೆ ಬದಲಾಗಿ ಕೇಡನ್ನು ಸಲ್ಲಿಸುವವರು ನನ್ನ ಶತ್ರುಗಳಾಗಿದ್ದಾರೆ. ನಾನು ಒಳ್ಳೇ ದನ್ನು ಅನುಸರಿಸುವವನಾಗಿದ್ದೇನೆ.
38:21b.PSA.038.021 ಓ ಕರ್ತನೇ, ನನ್ನನ್ನು ಬಿಡಬೇಡ ; ನನ್ನ ದೇವರೇ, ನನಗೆ ದೂರವಾಗಿರಬೇಡ.ನನ್ನ ರಕ್ಷಣೆ ಯಾಗಿರುವ ಕರ್ತನೇ, ನನ್ನ ಸಹಾಯಕ್ಕೆ ಬೇಗ ಬಾ.
38:22b.PSA.038.022 ನನ್ನ ರಕ್ಷಣೆ ಯಾಗಿರುವ ಕರ್ತನೇ, ನನ್ನ ಸಹಾಯಕ್ಕೆ ಬೇಗ ಬಾ.
39
39:1b.PSA.039.001 ನನ್ನ ನಾಲಿಗೆಯಿಂದ ಪಾಪಮಾಡದ ಹಾಗೆ ನನ್ನ ಮಾರ್ಗಗಳನ್ನು ಕಾಪಾಡಿ ಕೊಳ್ಳುವೆನೆಂದೂ ದುಷ್ಟನು ನನ್ನ ಮುಂದೆ ಇರುವಾಗ ನನ್ನ ಬಾಯಿಗೆ ಕಡಿವಾಣ ಇಟ್ಟುಕೊಳ್ಳುವೆನೆಂದೂ ಹೇಳಿದೆನು.
39:2b.PSA.039.002 ಮೌನದಿಂದ ಮೂಕನಾದೆನು; ಒಳ್ಳೇ ದನ್ನಾದರೂ ಆಡದೆ ಸುಮ್ಮನಿದ್ದೆನು; ಆದರೆ ನನ್ನ ವ್ಯಥೆಯು ಕಲಕಿತು.
39:3b.PSA.039.003 ನನ್ನ ಹೃದಯದಲ್ಲಿ ಸಂತಾಪ ಉಕ್ಕಿತು; ನಾನು ಯೋಚಿಸುತ್ತಿರುವಲ್ಲಿ ಬೆಂಕಿಯು ರಿಯಿತು. ನನ್ನ ನಾಲಿಗೆಯಿಂದ ಮಾತಾಡಿದೆನು.
39:4b.PSA.039.004 ಕರ್ತನೇ, ನಾನು ಎಷ್ಟು ಅಸ್ಥಿರನೆಂದು ತಿಳಿಯುವ ಹಾಗೆ ನನ್ನ ಅಂತ್ಯವನ್ನೂ ನನ್ನ ದಿವಸಗಳು ಕೊಂಚ ವೆಂಬದನ್ನೂ ನನಗೆ ತಿಳಿಸು.
39:5b.PSA.039.005 ಇಗೋ, ನನ್ನ ದಿವಸ ಗಳನ್ನು ಗೇಣುದ್ದವಾಗಿ ಮಾಡಿದ್ದೀ; ನನ್ನ ಆಯುಷ್ಯವು ನಿನ್ನ ಮುಂದೆ ಏನೂ ಇಲ್ಲದ ಹಾಗಿದೆ; ನಿಶ್ಚಯವಾಗಿ ಉತ್ತಮ ಸ್ಥಿತಿಯಲ್ಲಿರುವ ಪ್ರತಿಯೊಬ್ಬನು ಒಟ್ಟಾರೆಯಲ್ಲಿ ವ್ಯರ್ಥವಾದವನೇ. ಸೆಲಾ.
39:6b.PSA.039.006 ನಿಶ್ಚಯವಾಗಿ ಮನುಷ್ಯನು ವ್ಯರ್ಥವಾದ ತೋರಿಕೆ ಯಲ್ಲಿ ನಡೆದುಕೊಳ್ಳುತ್ತಾನೆ; ನಿಶ್ಚಯವಾಗಿ ವ್ಯರ್ಥ ವಾದ ಗದ್ದಲ ಮಾಡುತ್ತಾರೆ. ಅವನು ಐಶ್ವರ್ಯವನ್ನು ಕುಪ್ಪೆ ಮಾಡುತ್ತಾನೆ; ಆದರೆ ಅದನ್ನು ಕೂಡಿಸುವವರು ಯಾರೋ ಅರಿಯನು.
39:7b.PSA.039.007 ಹೀಗಿರಲಾಗಿ ಕರ್ತನೇ, ನಾನು ಇನ್ನು ಯಾವದಕ್ಕೆ ಕಾದುಕೊಳ್ಳಲಿ? ನನ್ನ ನಿರೀಕ್ಷೆ ನಿನ್ನಲ್ಲಿ ಅದೆ.
39:8b.PSA.039.008 ನನ್ನ ಎಲ್ಲಾ ದ್ರೋಹಗಳಿಂದ ನನ್ನನ್ನು ಬಿಡಿಸು; ಬುದ್ಧಿಹೀನನ ನಿಂದೆಗೆ ನನ್ನನ್ನು ಗುರಿಮಾಡಬೇಡ.
39:9b.PSA.039.009 ನಾನು ಮೌನವಾದೆನು, ನನ್ನ ಬಾಯಿ ತೆರೆಯಲಿಲ್ಲ; ನೀನು ಅದನ್ನು ಮಾಡಿದಿ.
39:10b.PSA.039.010 ನನ್ನಿಂದ ನಿನ್ನ ಪೆಟ್ಟನ್ನು ತೊಲಗಿಸು; ನಿನ್ನ ಕೈಹೊಡೆ ತದಿಂದ ನಾನು ಸತ್ತು ಹೋಗುತ್ತೇನೆ.
39:11b.PSA.039.011 ಅಕ್ರಮ ಕ್ಕೋಸ್ಕರ ಗದರಿಕೆಗಳಿಂದ ನೀನು ಮನುಷ್ಯನನ್ನು ಶಿಕ್ಷಿಸಿದರೆ ಅವನ ಸೌಂದರ್ಯವನ್ನು ನುಸಿಯ ಹಾಗೆ ಹಾಳುಮಾಡುತ್ತೀ; ನಿಶ್ಚಯವಾಗಿ ಪ್ರತಿ ಮನುಷ್ಯನು ವ್ಯರ್ಥವಾದವನೇ--ಸೆಲಾ.
39:12b.PSA.039.012 ಓ ಕರ್ತನೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ಮೊರೆಗೆ ಕಿವಿಗೊಡು; ನನ್ನ ಕಣ್ಣೀರಿಗೆ ಮೌನ ವಾಗಿರಬೇಡ. ನಾನು ನಿನ್ನ ಸಂಗಡ ಪರದೇಶಸ್ಥನು; ನನ್ನ ತಂದೆಗಳೆಲ್ಲರ ಹಾಗೆ ಪ್ರವಾಸಿಯಾಗಿದ್ದೇನೆ.ಕರ್ತನೇ ನನ್ನನ್ನು ಉಳಿಸು; ಆಗ ನಾನು ಇಲ್ಲಿಂದ ಹೋಗಿಬಿಟ್ಟು ಇಲ್ಲದೆ ಹೋಗುವದಕ್ಕಿಂತ ಮುಂಚೆ ಬಲವನ್ನು ತಿರಿಗಿ ಪಡೆಯುವೆನು.
39:13b.PSA.039.013 ಕರ್ತನೇ ನನ್ನನ್ನು ಉಳಿಸು; ಆಗ ನಾನು ಇಲ್ಲಿಂದ ಹೋಗಿಬಿಟ್ಟು ಇಲ್ಲದೆ ಹೋಗುವದಕ್ಕಿಂತ ಮುಂಚೆ ಬಲವನ್ನು ತಿರಿಗಿ ಪಡೆಯುವೆನು.
40
40:1b.PSA.040.001 ನಾನು ಕರ್ತನಿಗಾಗಿ ತಾಳ್ಮೆಯಿಂದ ಕಾದಿದ್ದೆನು; ಆತನು ಕಿವಿಗೊಟ್ಟು ನನ್ನ ಮೊರೆ ಯನ್ನು ಲಕ್ಷಿಸಿದನು.
40:2b.PSA.040.002 ಆತನು ನನ್ನನ್ನು ನಾಶನದ ಕುಣಿಯಿಂದಲೂ ಮತ್ತು ಬುರುದೆಯ ಕೆಸರಿನಿಂದಲೂ ಎತ್ತಿ ನನ್ನ ಪಾದಗಳನ್ನು ಬಂಡೆಯ ಮೇಲೆ ನಿಲ್ಲಿಸಿ ನನ್ನ ಹೆಜ್ಜೆಗಳನ್ನು ಸ್ಥಿರಪಡಿಸಿದನು.
40:3b.PSA.040.003 ನನ್ನ ಬಾಯಲ್ಲಿ ನೂತನ ಹಾಡನ್ನು ಇಟ್ಟಿದ್ದಾನೆ; ಅದು ನಮ್ಮ ದೇವರ ಸ್ತೋತ್ರವೇ; ಅನೇಕರು ಇದನ್ನು ನೋಡಿ ಭಯಪಟ್ಟು ಕರ್ತನಲ್ಲಿ ಭರವಸವಿಡುವರು.
40:4b.PSA.040.004 ಕರ್ತನನ್ನು ತನ್ನ ಭರವಸವಾಗಿ ಮಾಡಿಕೊಂಡು ಅಹಂಕಾರಿಗಳನ್ನು ಗೌರವಿಸದೆಯೂ ಇಲ್ಲವೆ ಸುಳ್ಳಿನ ಕಡೆಗೆ ತಿರುಗಿಕೊಳ್ಳ ದೆಯೂ ಇರುವ ಮನುಷ್ಯನು ಧನ್ಯನು.
40:5b.PSA.040.005 ಓ ನನ್ನ ದೇವರಾದ ಕರ್ತನೇ, ನೀನು ಮಾಡಿದ ನಿನ್ನ ಅದ್ಭುತ ಕಾರ್ಯಗಳೂ ನಮ್ಮ ಕಡೆಗಿರುವ ನಿನ್ನ ಯೋಚನೆಗಳೂ ಬಹಳ; ಅವುಗಳನ್ನು ಕ್ರಮವಾಗಿ ನಿನ್ನ ಮುಂದೆ ಎಣಿಸಲಾರೆನು; ಅವುಗಳನ್ನು ನಾನು ತಿಳಿಸಿ ಹೇಳಬೇಕಾದರೆ ಎಣಿಸುವದಕ್ಕಿಂತ ಹೆಚ್ಚಾಗಿವೆ.
40:6b.PSA.040.006 ಯಜ್ಞದಲ್ಲಿಯೂ ಅರ್ಪಣೆಯಲ್ಲಿಯೂ ನೀನು ಇಷ್ಟ ಪಡಲಿಲ್ಲ; ದಹನಬಲಿಯನ್ನೂ ಪಾಪದಬಲಿಯನ್ನೂ ನೀನು ಕೇಳಲಿಲ್ಲ. ನನ್ನ ಕಿವಿಗಳನ್ನು ನೀನು ತೆರೆದಿ;
40:7b.PSA.040.007 ಆಗ ನಾನು--ಇಗೋ, ನಾನು ಇದ್ದೇನೆ; ಪುಸ್ತಕದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ.
40:8b.PSA.040.008 ಓ ನನ್ನ ದೇವರೇ ನಿನಗೆ ಮೆಚ್ಚಿಕೆಯಾದದ್ದನ್ನು ಮಾಡಲು ಸಂತೋಷಿಸುತ್ತೇನೆ; ನಿನ್ನ ನ್ಯಾಯ ಪ್ರಮಾಣವು ನನ್ನ ಅಂತರಂಗದಲ್ಲಿ ಅದೆ.
40:9b.PSA.040.009 ನಾನು ನೀತಿಯನ್ನು ದೊಡ್ಡ ಸಭೆಯಲ್ಲಿ ಸಾರಿಬಿಟ್ಟಿದ್ದೇನೆ; ಇಗೋ, ಓ ಕರ್ತನೇ, ನಾನು ನನ್ನ ತುಟಿಗಳಿಗೆ ಅಡ್ಡಿ ಮಾಡಲಿಲ್ಲವೆಂಬ ಸಂಗತಿ ನೀನು ತಿಳಿದವ ನಾಗಿದ್ದೀ.
40:10b.PSA.040.010 ನಿನ್ನ ನೀತಿಯನ್ನು ನನ್ನ ಹೃದಯದಲ್ಲಿ ಅಡಗಿಸಲಿಲ್ಲ; ನಿನ್ನ ನಂಬಿಕೆಯನ್ನೂ ರಕ್ಷಣೆಯನ್ನೂ ನಾನು ಪ್ರಕಟಿಸಿದ್ದೇನೆ; ನಿನ್ನ ಪ್ರೀತಿ ಕರುಣೆಗಳನ್ನೂ ಸತ್ಯವನ್ನೂ ದೊಡ್ಡ ಸಭೆಯಲ್ಲಿ ನಾನು ಮರೆಮಾಡಲಿಲ್ಲ.
40:11b.PSA.040.011 ಕರ್ತನೇ, ನಿನ್ನ ಅಂತಃಕರುಣೆಗಳನ್ನು ನನ್ನಿಂದ ಹಿಂತೆಗೆಯಬೇಡ; ನಿನ್ನ ಪ್ರೀತಿ ಕರುಣೆಗಳೂ ನಿನ್ನ ಸತ್ಯವೂ ಯಾವಾಗಲೂ ನನ್ನನ್ನು ಕಾಯಲಿ.
40:12b.PSA.040.012 ಲೆಕ್ಕ ವಿಲ್ಲದಷ್ಟು ಕೇಡುಗಳು ನನ್ನ ಸುತ್ತಲು ಆವರಿಸಿಕೊಂಡಿವೆ; ನಾನು ಮೇಲಕ್ಕೆ ನೋಡಲಾರದಷ್ಟು ನನ್ನ ಅಕ್ರಮ ಗಳು ನನ್ನನ್ನು ಹಿಡಿದವೆ; ಅವು ನನ್ನ ತಲೆಯ ಕೂದಲು ಗಳಿಗಿಂತ ಹೆಚ್ಚಾಗಿವೆ; ಆದದರಿಂದ ನನ್ನ ಹೃದಯವು ನನ್ನನ್ನು ಕುಂದಿಸಿತು.
40:13b.PSA.040.013 ಓ ಕರ್ತನೇ, ನನ್ನನ್ನು ಬಿಡಿಸು ವದಕ್ಕೆ ಇಷ್ಟವುಳ್ಳವನಾಗಿ, ಓ ಕರ್ತನೆ, ನನ್ನ ಸಹಾ ಯಕ್ಕೆ ತ್ವರೆಪಡು.
40:14b.PSA.040.014 ನನ್ನ ಪ್ರಾಣವನ್ನು ತೆಗೆಯಲು ಅದನ್ನು ಹುಡುಕುವದಕ್ಕೆ ಕೂಡಿಕೊಳ್ಳುವವರೆಲ್ಲರೂ ಆಶಾಭಂಗಪಟ್ಟು ಲಜ್ಜೆಪಡಲಿ; ನನ್ನ ಕೇಡಿನಲ್ಲಿ ಸಂತೋಷಪಡುವವರು ಹಿಂದಕ್ಕೆ ಅಟ್ಟಲ್ಪಟ್ಟು ಅವ ಮಾನ ಹೊಂದಲಿ.
40:15b.PSA.040.015 ಆಹಾ, ಆಹಾ ಎಂದು ನನಗೆ ಹೇಳುವವರು ತಮ್ಮ ನಾಚಿಕೆಯ ಫಲಕ್ಕಾಗಿ ಹಾಳಾಗಲಿ;
40:16b.PSA.040.016 ನಿನ್ನನ್ನು ಹುಡುಕುವವರೆಲ್ಲರು ನಿನ್ನಲ್ಲಿ ಆನಂದಪಟ್ಟು ಸಂತೋಷಿಸಲಿ; ನಿನ್ನ ರಕ್ಷಣೆಯನ್ನು ಪ್ರೀತಿಮಾಡುವ ವರು--ಕರ್ತನು ಮಹಿಮೆಪಡಲಿ ಎಂದು ಯಾವಾ ಗಲೂ ಹೇಳಲಿ.ಆದರೆ ನಾನು ದೀನನೂ ಬಡ ವನೂ ಆಗಿದ್ದೇನೆ; ಆದರೂ ಕರ್ತನು ನನಗೋಸ್ಕರ ಯೋಚಿಸುತ್ತಾನೆ; ನನ್ನ ಸಹಾಯವೂ ನನ್ನನ್ನು ತಪ್ಪಿಸುವಾ ತನೂ ನೀನೇ; ಓ ನನ್ನ ದೇವರೇ, ತಡ ಮಾಡಬೇಡ.
40:17b.PSA.040.017 ಆದರೆ ನಾನು ದೀನನೂ ಬಡ ವನೂ ಆಗಿದ್ದೇನೆ; ಆದರೂ ಕರ್ತನು ನನಗೋಸ್ಕರ ಯೋಚಿಸುತ್ತಾನೆ; ನನ್ನ ಸಹಾಯವೂ ನನ್ನನ್ನು ತಪ್ಪಿಸುವಾ ತನೂ ನೀನೇ; ಓ ನನ್ನ ದೇವರೇ, ತಡ ಮಾಡಬೇಡ.
41
41:1b.PSA.041.001 ಬಡವನನ್ನು ಪರಾಂಬರಿಸುವವನು ಧನ್ಯನು; ಕೇಡಿನ ಸಮಯದಲ್ಲಿ ಕರ್ತನು ಅವನನ್ನು ತಪ್ಪಿಸುವನು.
41:2b.PSA.041.002 ಕರ್ತನು ಅವನನ್ನು ಕಾಪಾಡಿ ಜೀವದಲ್ಲಿಡುವನು; ಅವನು ಭೂಮಿಯಲ್ಲಿ ಧನ್ಯನಾಗಿ ರುವನು; ನೀನು ಅವನ ಶತ್ರುಗಳ ಇಷ್ಟಕ್ಕೆ ಅವನನ್ನು ಒಪ್ಪಿಸದೆ ಇರುವಿ.
41:3b.PSA.041.003 ಹಾಸಿಗೆಯ ಮೇಲೆ ಕ್ಷೀಣಿಸುವ ವನನ್ನು ಕರ್ತನು ಬಲಪಡಿಸುವನು. ನೀನು ಅವನ ರೋಗದಲ್ಲಿ ಹಾಸಿಗೆಯನ್ನು ಸರಿಮಾಡುವಿ.
41:4b.PSA.041.004 ಕರ್ತನೇ, ನನಗೆ ಕರುಣೆ ತೋರಿಸಿ ನನ್ನ ಪ್ರಾಣವನ್ನು ಸ್ವಸ್ಥಮಾಡು; ನಿನಗೆ ವಿರೋಧವಾಗಿ ಪಾಪಮಾಡಿದೆ ನೆಂದು ನಾನು ಹೇಳಿದೆನು.
41:5b.PSA.041.005 ಅವನು ಸತ್ತು ಅವನ ಹೆಸರು ನಾಶವಾಗುವದು ಯಾವಾಗ ಎಂದು ನನ್ನ ಶತ್ರುಗಳು ನನ್ನನ್ನು ಕುರಿತು ಕೇಡನ್ನು ಮಾತನಾಡುತ್ತಾರೆ.
41:6b.PSA.041.006 ನನ್ನನ್ನು ನೋಡುವದಕ್ಕೆ ಅವನು ಬಂದರೆ ವ್ಯರ್ಥ ಮಾತು ಆಡುತ್ತಾನೆ; ಅವನ ಹೃದಯವು ಅವನಿಗೆ ಅಕ್ರಮವನ್ನು ಕೂಡಿಸುತ್ತದೆ; ಅವನು ಹೊರಗೆ ಹೋದಾಗ ಅದನ್ನು ಹೇಳುತ್ತಾನೆ.
41:7b.PSA.041.007 ನನ್ನನ್ನು ಹಗೆ ಮಾಡುವವರೆಲ್ಲರು ಕೂಡಿ ನನ್ನ ಮೇಲೆ ಪಿಸುಗುಟ್ಟು ತ್ತಾರೆ; ನನಗೆ ವಿರೋಧವಾಗಿ ಕೇಡನ್ನು ಕಲ್ಪಿಸುತ್ತಾರೆ;
41:8b.PSA.041.008 ಕೆಟ್ಟ ರೋಗವು ಅವನನ್ನು ಹಿಡಿದದೆ, ಈಗ ಅವನು ಮಲಗಿಕೊಂಡವನಾಗಿ ಎಂದಿಗೂ ಏಳನು ಎಂದು ಅವರು ಅನ್ನುತ್ತಾರೆ.
41:9b.PSA.041.009 ಹೌದು, ನನ್ನ ರೊಟ್ಟಿಯನ್ನು ತಿಂದಂಥ, ನಾನು ಭರವಸವಿಟ್ಟಂಥ, ನನ್ನ ಆಪ್ತ ಸ್ನೇಹಿತನು ನನಗೆ ವಿರೋಧವಾಗಿ ತನ್ನ ಕಾಲನ್ನು ಅಡ್ಡಗೊಟ್ಟಿದ್ದಾನೆ.
41:10b.PSA.041.010 ಆದರೆ ನೀನು, ಓ ಕರ್ತನೇ, ನನ್ನ ಮೇಲೆ ಕರುಣೆತೋರಿಸಿ ನನ್ನನ್ನು ಏಳಮಾಡು; ಆಗ ನಾನು ಅವರಿಗೆ ಪ್ರತೀಕಾರವನ್ನು ಮಾಡುವೆನು.
41:11b.PSA.041.011 ನನ್ನ ಶತ್ರು ನನ್ನ ಮೇಲೆ ಜಯಧ್ವನಿ ಮಾಡದೆ ಇರುವದ ರಿಂದಲೇ ನಿನ್ನ ಒಲುಮೆಯು ನನಗಿರುವ ದೆಂದು ನಾನು ಬಲ್ಲೆನು.
41:12b.PSA.041.012 ನನ್ನನ್ನಾದರೋ ನನ್ನ ಯಥಾರ್ಥ ತ್ವದಲ್ಲಿ ನೀನು ಉದ್ಧರಿಸಿ ನಿನ್ನ ಸಮ್ಮುಖದಲ್ಲಿ ಎಂದೆಂದಿಗೂ ನನ್ನನ್ನು ನಿಲ್ಲಿಸಿದ್ದೀ.ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಕ್ಕೂ ಕೊಂಡಾಟ ವಾಗಲಿ. ಆಮೆನ್. ಆಮೆನ್.
41:13b.PSA.041.013 ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಕ್ಕೂ ಕೊಂಡಾಟ ವಾಗಲಿ. ಆಮೆನ್. ಆಮೆನ್.
42
42:1b.PSA.042.001 ಓ ದೇವರೇ, ಜಿಂಕೆಯು ನೀರಿನ ತೊರೆಗಳನ್ನು ಹೇಗೆ ಬಯಸುವದೋ ಹಾಗೆಯೇ ನನ್ನ ಪ್ರಾಣವು ನಿನ್ನನ್ನು ಬಯಸುತ್ತದೆ.
42:2b.PSA.042.002 ದೇವರಿ ಗೋಸ್ಕರ ಹೌದು, ಜೀವವುಳ್ಳ ದೇವರಿಗೋಸ್ಕರ ನನ್ನ ಪ್ರಾಣವು ದಾಹಗೊಳ್ಳುತ್ತದೆ; ಯಾವಾಗ ಬಂದು ದೇವರ ಮುಂದೆ ಕಾಣಿಸಿಕೊಳ್ಳಲಿ?
42:3b.PSA.042.003 ನಿನ್ನ ದೇವರು ಎಲ್ಲಿ ಎಂದು ಅವರು ದಿನವೆಲ್ಲಾ ನನಗೆ ಹೇಳುವ ದರಿಂದ ನನ್ನ ಕಣ್ಣೀರು ನನಗೆ ಹಗಲಿರುಳು ಆಹಾರ ವಾಗಿದೆ.
42:4b.PSA.042.004 ಇವುಗಳನ್ನು ಜ್ಞಾಪಕಮಾಡಿಕೊಂಡಾಗ ನನ್ನ ಪ್ರಾಣವು ನನ್ನಲ್ಲಿ ಕ್ಷೀಣಿಸುತ್ತದೆ; ಸಮೂಹ ದೊಂದಿಗೆ ನಾನು ಹೋಗಿ ಉತ್ಸಾಹಧ್ವನಿಯಿಂದಲೂ ಸ್ತೋತ್ರದಿಂದಲೂ ಪರಿಶುದ್ಧ ದಿನವನ್ನು ಆಚರಿಸುವ ಸಮೂಹದ ಸಂಗಡ ದೇವರ ಆಲಯಕ್ಕೆ ಅವರೊಂ ದಿಗೆ ನಾನು ಹೋದೆನಲ್ಲಾ.
42:5b.PSA.042.005 ನನ್ನ ಪ್ರಾಣವೇ,ನೀನು ಕುಗ್ಗಿಹೋಗಿರುವದೇನು? ನನ್ನಲ್ಲಿ ನೀನು ಯಾಕೆ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು; ನಾನು ಆತನ ಸಹಾಯಕ್ಕಾಗಿ ಆತನನ್ನು ಇನ್ನೂ ಕೊಂಡಾಡುವೆನು.
42:6b.PSA.042.006 ಓ ನನ್ನ ದೇವರೇ, ನನ್ನ ಪ್ರಾಣವು ನನ್ನಲ್ಲಿ ಕುಗ್ಗು ತ್ತದೆ; ಆದದರಿಂದ ಯೊರ್ದನ್ ಸೀಮೆಯಿಂದಲೂ ಹೆರ್ಮೋನ್ಯರಿಂದಲೂ ಮಿಸಾರ್ ಸಣ್ಣ ಬೆಟ್ಟದಿಂದಲೂ ನಿನ್ನನ್ನು ಜ್ಞಾಪಕಮಾಡಿಕೊಳ್ಳುತ್ತೇನೆ.
42:7b.PSA.042.007 ನಿನ್ನ ನೀರಿನ ಪ್ರವಾಹದ ಶಬ್ದದಿಂದ ಅಗಾಧವು ಅಗಾಧಕ್ಕೆ ಕೂಗು ತ್ತದೆ; ನಿನ್ನ ಅಲೆಗಳೂ ತೆರೆಗಳೂ ಎಲ್ಲಾ ನನ್ನ ಮೇಲೆ ಹಾದುಹೋಗಿವೆ.
42:8b.PSA.042.008 ಆದಾಗ್ಯೂ ಹಗಲಿನಲ್ಲಿ ಕರ್ತನು ತನ್ನ ಪ್ರೀತಿ, ಕರುಣೆಯನ್ನು ಆಜ್ಞಾಪಿಸುತ್ತಾನೆ; ರಾತ್ರಿ ಯಲ್ಲಿ ನನ್ನೊಂದಿಗೆ ಆತನ ಹಾಡೂ ನನ್ನ ಜೀವಾ ಧಾರಕನಾದ ದೇವರಿಗೆ ಪ್ರಾರ್ಥಿಸುವೆನು.
42:9b.PSA.042.009 ದೇವರೇ, ಯಾಕೆ ನನ್ನನ್ನು ಮರೆತುಬಿಟ್ಟಿದ್ದೀ? ಯಾಕೆ ನಾನು ಶತ್ರುವಿನ ಬಾಧೆಯಲ್ಲಿ ಇದ್ದು ದುಃಖದಲ್ಲಿ ನಡೆದು ಕೊಳ್ಳಬೇಕೆಂದು ನನ್ನ ಬಂಡೆಯಾದ ದೇವರಿಗೆ ನಾನು ಹೇಳುವೆನು?
42:10b.PSA.042.010 ನನ್ನ ವೈರಿಗಳು--ನಿನ್ನ ದೇವರು ಎಲ್ಲಿ ಎಂದು ದಿನವೆಲ್ಲಾ ನನಗೆ ಹೇಳಿ ನನ್ನನ್ನು ನಿಂದಿಸಿದ್ದರಿಂದ ನನ್ನ ಎಲುಬುಗಳು ಮುರಿದಹಾಗಿವೆ.ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ನಾನು ಇನ್ನೂ ಕೊಂಡಾಡುವೆನು.
42:11b.PSA.042.011 ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ನಾನು ಇನ್ನೂ ಕೊಂಡಾಡುವೆನು.
43
43:1b.PSA.043.001 ಓ ದೇವರೇ, ನನಗೆ ನ್ಯಾಯತೀರಿಸು. ಭಕ್ತಿ ಇಲ್ಲದ ಜನಾಂಗದ ಸಂಗಡ ನನ್ನ ನ್ಯಾಯವನ್ನು ವಾದಿಸು; ಮೋಸವೂ ಅನ್ಯಾಯವೂ ಉಳ್ಳ ಮನುಷ್ಯನಿಂದ ನನ್ನನ್ನು ತಪ್ಪಿಸು.
43:2b.PSA.043.002 ನೀನು ನನ್ನ ಬಲವಾದ ದೇವರಾಗಿದ್ದೀ; ಯಾಕೆ ನನ್ನನ್ನು ತಳ್ಳಿ ಬಿಟ್ಟಿದ್ದೀ? ಯಾಕೆ ನಾನು ಶತ್ರುವಿನ ಬಾಧೆಯಲ್ಲಿ ಇದ್ದು ದುಃಖದಲ್ಲಿ ನಡೆದುಕೊಳ್ಳಬೇಕು?
43:3b.PSA.043.003 ನಿನ್ನ ಬೆಳ ಕನ್ನೂ ಸತ್ಯವನ್ನೂ ಕಳುಹಿಸು; ಅವು ನನ್ನನ್ನು ನಡಿಸಿ ನಿನ್ನ ಪರಿಶುದ್ಧ ಪರ್ವತಕ್ಕೂ ಗುಡಾರಗಳಿಗೂ ನನ್ನನ್ನು ಬರಮಾಡಲಿ.
43:4b.PSA.043.004 ಆಗ ದೇವರ ಬಲಿಪೀಠದ ಬಳಿಗೂ ನನ್ನ ಅಧಿಕ ಸಂತೋಷವಾದ ದೇವರ ಬಳಿಗೂ ಬಂದು ಹೌದು, ಕಿನ್ನರಿಯಿಂದ, ನನ್ನ ದೇವರಾದ ಓ ದೇವರೇ, ನಿನ್ನನ್ನು ಕೊಂಡಾಡುವೆನು.ಓ ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ಇನ್ನೂ ಕೊಂಡಾಡುವೆನು.
43:5b.PSA.043.005 ಓ ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ಇನ್ನೂ ಕೊಂಡಾಡುವೆನು.
44
44:1b.PSA.044.001 ಓ ದೇವರೇ, ನೀನು ಹಿಂದಿನ ಕಾಲದಲ್ಲಿ, ಅಂದರೆ ನಮ್ಮ ತಂದೆಗಳ ದಿವಸದಲ್ಲಿ ಮಾಡಿದ ಕಾರ್ಯವನ್ನು ಅವರು ನಮಗೆ ವಿವರಿಸಿದ್ದಾರೆ; ಅದನ್ನು ನಾವು ನಮ್ಮ ಕಿವಿಗಳಿಂದ ಕೇಳಿದ್ದೇವೆ.
44:2b.PSA.044.002 ನೀನು ನಿನ್ನ ಕೈಯಿಂದ ಜನಾಂಗಗಳನ್ನು ಹೊರಡಿಸಿ (ನಮ್ಮ ತಂದೆಗಳನ್ನು) ನೆಟ್ಟಿದ್ದೀ; ಜನರನ್ನು ಬಾಧೆಪಡಿಸಿ ಅವರನ್ನು ಹೊರಗೆ ಹಾಕಿದಿ.
44:3b.PSA.044.003 ಅವರು ತಮ್ಮ ಕತ್ತಿಯಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ; ಅವರ ತೋಳು ಅವರನ್ನು ರಕ್ಷಿಸಲಿಲ್ಲ; ಆದರೆ ನಿನ್ನ ಬಲಗೈಯೂ ತೋಳೂ ನಿನ್ನ ಮುಖದ ಪ್ರಕಾಶವೂ ಇವುಗಳೇ ಅವರನ್ನು ರಕ್ಷಿಸಿದವು; ನಿನ್ನ ಒಲುಮೆ ಅವರಿಗಿತ್ತಲ್ಲಾ.
44:4b.PSA.044.004 ಓ ದೇವರೇ, ನೀನೇ ನನ್ನ ಅರಸನು; ಯಾಕೋಬ ನಿಗೆ ಬಿಡುಗಡೆಗಳನ್ನು ಆಜ್ಞಾಪಿಸು.
44:5b.PSA.044.005 ನಿನ್ನಿಂದ ನಮ್ಮ ವೈರಿಗಳನ್ನು ದೊಬ್ಬುವೆವು; ನಿನ್ನ ಹೆಸರಿನಲ್ಲಿ ನಮ್ಮ ಎದುರಾಳಿಗಳನ್ನು ತುಳಿಯುವೆವು.
44:6b.PSA.044.006 ನಾನು ನನ್ನ ಬಿಲ್ಲಿ ನಲ್ಲಿ ಭರವಸವಿಡುವದಿಲ್ಲ. ನನ್ನ ಕತ್ತಿಯು ನನ್ನನ್ನು ರಕ್ಷಿಸುವದಿಲ್ಲ.
44:7b.PSA.044.007 ನೀನು ನಮ್ಮ ವೈರಿಗಳಿಂದ ನಮ್ಮನ್ನು ರಕ್ಷಿಸಿದಿ; ನಮ್ಮನ್ನು ಹಗೆಮಾಡಿದವರನ್ನು ನಾಚಿಕೆ ಪಡಿಸಿದಿ.
44:8b.PSA.044.008 ನಾವು ದಿನವೆಲ್ಲಾ ದೇವರಲ್ಲಿ ಹೆಚ್ಚಳ ಪಡುವೆವು; ನಿನ್ನ ಹೆಸರನ್ನು ಯುಗಯುಗಕ್ಕೂ ಕೊಂಡಾ ಡುವೆವು. ಸೆಲಾ.
44:9b.PSA.044.009 ಆದರೆ ನೀನು ನಮ್ಮನ್ನು ತಳ್ಳಿಬಿಟ್ಟು ನಮ್ಮನ್ನು ಅವಮಾನಪಡಿಸುತ್ತೀ; ನಮ್ಮ ಸೈನ್ಯಗಳ ಸಂಗಡ ನೀನು ಹೊರಟುಹೋಗುವದಿಲ್ಲ.
44:10b.PSA.044.010 ವೈರಿಯ ಮುಂದೆ ನಾವು ಹಿಂದಿರುಗ ಮಾಡುತ್ತೀ; ನಮ್ಮ ಹಗೆಯವರು ತಮಗೋಸ್ಕರ ಕೊಳ್ಳೆ ಇಡುತ್ತಾರೆ.
44:11b.PSA.044.011 ತಿನ್ನತಕ್ಕ ಕುರಿಗಳ ಹಾಗೆ ನಮ್ಮನ್ನು ಅವರಿಗೆ ಒಪ್ಪಿಸಿದ್ದೀ; ಅನ್ಯಜನಾಂಗ ಗಳಲ್ಲಿ ನಮ್ಮನ್ನು ಚದರಿಸಿದ್ದೀ.
44:12b.PSA.044.012 ನಿನ್ನ ಜನರನ್ನು ಕ್ರಯವಿಲ್ಲದೆ ಮಾರಿಬಿಡುತ್ತೀ. ಅವರ ಬೆಲೆಯಿಂದ ನೀನು ನಿನ್ನ ಸಂಪತ್ತನ್ನು ಹೆಚ್ಚು ಮಾಡಲಿಲ್ಲ.
44:13b.PSA.044.013 ನಮ್ಮ ನೆರೆಯವರಿಗೆ ನಮ್ಮನ್ನು ನಿಂದೆಗೂ ಸುತ್ತಲಿರುವವರಿಗೆ ಗೇಲಿಯಾಗಿಯೂ ಹಾಸ್ಯವಾಗಿಯೂ ನಮ್ಮನ್ನು ಇಡುತ್ತೀ.
44:14b.PSA.044.014 ಅನ್ಯಜನಾಂಗಗಳಲ್ಲಿ ಗಾದೆಯಾಗಿಯೂ ಪ್ರಜೆಗಳಲ್ಲಿ ತಲೆಯಾಡಿಸುವಂತೆ ನಮ್ಮನ್ನು ಇಡುತ್ತೀ.
44:15b.PSA.044.015 ನಿಂದಕನ ಮತ್ತು ದೂಷಕನ ಸ್ವರಕ್ಕೋಸ್ಕರವೂ ಶತ್ರುವಿನ ಮುಯ್ಯಿಗೆಮುಯ್ಯಿ ಕೊಡುವವನ ನಿಮಿ ತ್ತವೂ
44:16b.PSA.044.016 ದಿನವೆಲ್ಲಾ ನನ್ನ ಗಲಿಬಿಲಿಯು ನನ್ನ ಮುಂದೆ ಇದೆ; ನನ್ನ ಮುಖದ ನಾಚಿಕೆಯು ನನ್ನನ್ನು ಮುಚ್ಚಿಯದೆ.
44:17b.PSA.044.017 ಇದೆಲ್ಲಾ ನಮ್ಮ ಮೇಲೆ ಬಂತು; ಆದರೆ ನಿನ್ನನ್ನು ಮರೆತುಬಿಡಲಿಲ್ಲ; ನಿನ್ನ ಒಡಂಬಡಿಕೆಯಲ್ಲಿ ಸುಳ್ಳಾ ಡಲಿಲ್ಲ.
44:18b.PSA.044.018 ನಮ್ಮ ಹೃದಯವು ಹಿಂದಿರುಗಲಿಲ್ಲ; ನಮ್ಮ ಹೆಜ್ಜೆಗಳು ನಿನ್ನ ಹಾದಿಯಿಂದ ತೊಲಗಲಿಲ್ಲ.
44:19b.PSA.044.019 ಆದಾ ಗ್ಯೂ ಮಹಾಘಟಸರ್ಪಗಳ ಸ್ಥಳದಲ್ಲಿ ನಮ್ಮನ್ನು ಜಜ್ಜಿ ಮರಣದ ನೆರಳಿನಿಂದ ನಮ್ಮನ್ನು ಮುಚ್ಚಿಬಿಟ್ಟಿದ್ದೀ.
44:20b.PSA.044.020 ನಾವು ನಮ್ಮ ದೇವರ ಹೆಸರನ್ನು ಮರೆತು ಅನ್ಯ ದೇವರಿಗೆ ನಮ್ಮ ಕೈಗಳನ್ನು ಚಾಚಿದರೆ
44:21b.PSA.044.021 ದೇವರು ಅದನ್ನು ವಿಚಾರಿಸನೋ? ಆತನು ಹೃದಯದ ಮರ್ಮ ಗಳನ್ನು ತಿಳಿದಿದ್ದಾನೆ.
44:22b.PSA.044.022 ಹೌದು, ನಿನ್ನ ನಿಮಿತ್ತ ದಿನ ವೆಲ್ಲಾ ಕೊಲ್ಲಲ್ಪಡುತ್ತೇವೆ; ಕೊಯ್ಗುರಿಗಳ ಹಾಗೆ ಎಣಿಸಲ್ಪಡುತ್ತೇವೆ.
44:23b.PSA.044.023 ಓ ಕರ್ತನೇ, ಎಚ್ಚರವಾಗು, ಯಾಕೆ ನಿದ್ರೆ ಮಾಡುತ್ತೀ? ಎದ್ದೇಳು; ಸದಾಕಾಲಕ್ಕೂ ನಮ್ಮನ್ನು ತಳ್ಳಿಬಿಡಬೇಡ.
44:24b.PSA.044.024 ಯಾಕೆ ನಿನ್ನ ಮುಖವನ್ನು ಮರೆ ಮಾಡಿ ನಮ್ಮ ಸಂಕಟವನ್ನೂ ಬಾಧೆಯನ್ನೂ ಮರೆತು ಬಿಡುತ್ತೀ.
44:25b.PSA.044.025 ನಮ್ಮ ಪ್ರಾಣವು ಧೂಳಿನ ವರೆಗೂ ಬೊಗ್ಗಿಯದೆ; ನಮ್ಮ ಹೊಟ್ಟೆಯು ಭೂಮಿಗೆ ಅಂಟಿ ಕೊಂಡಿದೆ.ನಮಗೆ ಸಹಾಯವಾಗಿ ಏಳು; ನಿನ್ನ ಕೃಪೆಯ ನಿಮಿತ್ತ ನಮ್ಮನ್ನು ವಿಮೋಚಿಸು.
44:26b.PSA.044.026 ನಮಗೆ ಸಹಾಯವಾಗಿ ಏಳು; ನಿನ್ನ ಕೃಪೆಯ ನಿಮಿತ್ತ ನಮ್ಮನ್ನು ವಿಮೋಚಿಸು.
45
45:1b.PSA.045.001 ನನ್ನ ಹೃದಯವು ಒಂದು ದಿವ್ಯ ವಿಷಯವನ್ನು ರಚಿಸುತ್ತಿರುವದು; ಅರಸನನ್ನು ಕುರಿತು ನಾನು ಮಾಡಿದವುಗಳನ್ನು ವಿವರಿಸುತ್ತೇನೆ; ನನ್ನ ನಾಲಿಗೆಯು ಬರೆಯುವವನ ಲೇಖನಿಯಂತೆ ಸಿದ್ಧವಾಗಿದೆ.
45:2b.PSA.045.002 ನೀನು ಮನುಷ್ಯರ ಮಕ್ಕಳಿಗಿಂತ ಅತಿ ಸುಂದರ ನಾಗಿದ್ದೀ; ನಿನ್ನ ತುಟಿಗಳಲ್ಲಿ ಕೃಪೆಯು ಹೊಯಿದದೆ; ಆದದರಿಂದ ದೇವರು ಎಂದೆಂದಿಗೂ ನಿನ್ನನ್ನು ಆಶೀ ರ್ವದಿಸಿದ್ದಾನೆ.
45:3b.PSA.045.003 ಓ ಪರಾಕ್ರಮಿಯೇ, ನಿನ್ನ ಮಹಿಮೆಯಿಂದಲೂ ಘನತೆಯಿಂದಲೂ ನಿನ್ನ ಕತ್ತಿಯನ್ನು ಸೊಂಟಕ್ಕೆ ಬಿಗಿ ದುಕೋ.
45:4b.PSA.045.004 ಸತ್ಯತೆ ಸಾತ್ವಿಕತೆ ನೀತಿಗೋಸ್ಕರವೂ ನಿನ್ನ ಘನತೆಯಿಂದ ಅಭಿವೃದ್ಧಿಹೊಂದಿ ಸವಾರಿಮಾಡು; ನಿನ್ನ ಬಲಗೈ ಭಯಂಕರವಾದವುಗಳನ್ನು ನಿನಗೆ ಕಲಿಸುವದು.
45:5b.PSA.045.005 ನಿನ್ನ ಹದವಾದ ಬಾಣಗಳು ಅರಸನ ಶತ್ರು ಗಳ ಹೃದಯದಲ್ಲಿ ನೆಟ್ಟಿವೆ; ಅವುಗಳಿಂದ ಜನರು ನಿನ್ನ ಕೆಳಗೆ ಬೀಳುತ್ತಾರೆ
45:6b.PSA.045.006 ಓ ದೇವರೇ, ನಿನ್ನ ಸಿಂಹಾಸ ನವು ಎಂದೆಂದಿಗೂ ಇರುವದು; ನಿನ್ನ ರಾಜ್ಯದಂಡವು ನ್ಯಾಯದಂಡವಾಗಿದೆ.
45:7b.PSA.045.007 ನೀನು ನೀತಿಯನ್ನು ಪ್ರೀತಿ ಮಾಡುತ್ತೀ; ದುಷ್ಟತ್ವವನ್ನು ಹಗೆಮಾಡುತ್ತೀ; ಆದದ ರಿಂದ ದೇವರು, ನಿನ್ನ ದೇವರು, ನಿನ್ನ ಸಂಗಡಿಗರಿಗಿಂತ ಹೆಚ್ಚಾಗಿ ನಿನ್ನನ್ನು ಆನಂದ ತೈಲದಿಂದ ಅಭಿಷೇಕಿಸಿ ದ್ದಾನೆ.
45:8b.PSA.045.008 ನಿನ್ನ ವಸ್ತ್ರಗಳೆಲ್ಲಾ ಬೋಳವು ಅಗರು ದಾಲ್ಚಿನ್ನಿ ಇವುಗಳ ಸುವಾಸನೆಯಿಂದ ಇರುತ್ತವೆ. ಇವುಗಳಿಂದ ಅವರು ದಂತದ ಅರಮನೆಗಳೊಳಗಿಂದ ನಿನ್ನನ್ನು ಸಂತೋಷಪಡಿಸುತ್ತಾರೆ.
45:9b.PSA.045.009 ಅರಸುಗಳ ಕುಮಾರ್ತೆ ಯರು ನಿನ್ನ ಗೌರವವುಳ್ಳ ಸ್ತ್ರೀಯರಲ್ಲಿ ಇದ್ದಾರೆ; ರಾಣಿಯು ಓಫಿರ್ ಬಂಗಾರವನ್ನು ಧರಿಸಿಕೊಂಡು ನಿನ್ನ ಬಲಗಡೆಯಲ್ಲಿ ನಿಂತಿದ್ದಾಳೆ.
45:10b.PSA.045.010 ಓ ಮಗಳೇ, ಕಿವಿಗೊಟ್ಟು ಕೇಳಿ ಆಲೋಚಿಸು, ನಿನ್ನ ಸ್ವಂತ ಜನರನ್ನು ನಿನ್ನ ತಂದೆಯ ಮನೆಯನ್ನು ಮರೆತುಬಿಡು.
45:11b.PSA.045.011 ಆಗ ಅರಸನು ನಿನ್ನ ಸೌಂದರ್ಯ ವನ್ನು ಬಹಳವಾಗಿ ಅಪೇಕ್ಷಿಸುವನು; ಆತನೇ ನಿನ್ನ ಕರ್ತನು; ಆತನನ್ನು ಆರಾಧಿಸು.
45:12b.PSA.045.012 ತೂರಿನ ಮಗಳು ಕಾಣಿಕೆಯೊಂದಿಗೆ ಅಲ್ಲಿ ಇರುವಳು; ಅಂದರೆ ಪ್ರಜೆ ಗಳಲ್ಲಿ ಸ್ಥಿತಿವಂತರು ನಿನ್ನ ದಯೆಯನ್ನು ಕೋರುವರು.
45:13b.PSA.045.013 ಅರಸನ ಮಗಳು ತನ್ನಲ್ಲಿ ಪೂರ್ಣ ಘನವುಳ್ಳವ ಳಾಗಿದ್ದಾಳೆ; ಅವಳ ವಸ್ತ್ರವು ಚಿನ್ನದಿಂದ ನೆಯಿದದೆ.
45:14b.PSA.045.014 ಇವಳು ಕಸೂತಿ ವಸ್ತ್ರಗಳನ್ನುಟ್ಟು ಅರಸನ ಬಳಿಗೆ ತರಲ್ಪಡುತ್ತಾಳೆ; ಅವಳ ಹಿಂದೆ ಇರುವ ಕನ್ಯೆಯರಾದ ಅವಳ ಸಂಗಡಿಗರು ನಿನ್ನ ಬಳಿಗೆ ತರಲ್ಪಡುತ್ತಾರೆ.
45:15b.PSA.045.015 ಸಂತೋಷದಿಂದಲೂ ಉಲ್ಲಾಸದಿಂದಲೂ ಅವರು ತರಲ್ಪಡುತ್ತಾರೆ; ಅವರು ಅರಸನ ಅರಮನೆಯೊಳಗೆ ಪ್ರವೇಶಿಸುವರು.
45:16b.PSA.045.016 ನಿನ್ನ ತಂದೆಗಳಿಗೆ ಬದಲಾಗಿ ನಿನ್ನ ಮಕ್ಕಳು ಇರುವರು; ಅವರನ್ನು ಭೂಮಿಯ ಮೇಲೆಲ್ಲಾ ಪ್ರಧಾನರನ್ನಾಗಿ ಮಾಡುವಿ.ತಲತಲಾಂತರಗಳ ಲ್ಲೆಲ್ಲಾ ನಿನ್ನ ಹೆಸರನ್ನು ನಾನು ಜ್ಞಾಪಕಪಡಿಸುವೆನು; ಆದದರಿಂದ ಜನರು ಯುಗಯುಗಾಂತರಗಳಿಗೂ ನಿನ್ನನ್ನು ಕೊಂಡಾಡುವರು.
45:17b.PSA.045.017 ತಲತಲಾಂತರಗಳ ಲ್ಲೆಲ್ಲಾ ನಿನ್ನ ಹೆಸರನ್ನು ನಾನು ಜ್ಞಾಪಕಪಡಿಸುವೆನು; ಆದದರಿಂದ ಜನರು ಯುಗಯುಗಾಂತರಗಳಿಗೂ ನಿನ್ನನ್ನು ಕೊಂಡಾಡುವರು.
46
46:1b.PSA.046.001 ನಮ್ಮ ಆಶ್ರಯವೂ ಬಲವೂ ಆಗಿರುವ ದೇವರು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
46:2b.PSA.046.002 ಆದದರಿಂದ ಭೂಮಿಯು ತೆಗೆದು ಹಾಕಲ್ಪಟ್ಟರೂ ಬೆಟ್ಟಗಳು ಸಮುದ್ರದ ಮಧ್ಯಕ್ಕೆ ಒಯ್ಯ ಲ್ಪಟ್ಟರೂ
46:3b.PSA.046.003 ಅದರ ನೀರುಗಳು ಘೋಷಿಸಿ ಕದಲಿದರೂ ಅದರ ಉಬ್ಬರದಿಂದ ಬೆಟ್ಟಗಳು ಅಲ್ಲಾಡಿದರೂ ನಾವು ಭಯಪಡೆವು. ಸೆಲಾ.
46:4b.PSA.046.004 ಒಂದು ನದಿ ಅದೆ; ಅದರ ಕಾಲುವೆಗಳು ದೇವರ ಪಟ್ಟಣವನ್ನೂ ಮಹೋನ್ನತನ ಗುಡಾರಗಳ ಪರಿಶುದ್ಧ ಸ್ಥಳವನ್ನೂ ಸಂತೋಷಪಡಿಸುತ್ತವೆ.
46:5b.PSA.046.005 ದೇವರು ಅದರ ಮಧ್ಯದಲ್ಲಿ ಇದ್ದಾನೆ; ಅದು ಕದಲದು; ದೇವರು ಹೊತ್ತಾರೆಯಲ್ಲಿ ಅದಕ್ಕೆ ಸಹಾಯ ಮಾಡುವನು.
46:6b.PSA.046.006 ಅನ್ಯ ಜನಾಂಗವು ಘೋಷಿಸಿತು, ರಾಜ್ಯಗಳು ಕದಲಿದವು; ಆತನು ತನ್ನ ಧ್ವನಿಯನ್ನೆತ್ತಿ ಕೂಗಿದಾಗ ಭೂಮಿಯು ಕರಗಿತು.
46:7b.PSA.046.007 ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
46:8b.PSA.046.008 ಬನ್ನಿರಿ, ಕರ್ತನ ಕಾರ್ಯಗಳನ್ನು ದೃಷ್ಟಿಸಿರಿ. ಆತನು ಭೂಮಿಯಲ್ಲಿ ಎಂಥಾ ನಾಶನಗಳನ್ನು ನಡಿಸಿದ್ದಾನೆ;
46:9b.PSA.046.009 ಯುದ್ಧಗಳನ್ನು ಭೂಮಿಯ ಅಂತ್ಯದ ವರೆಗೆ ನಿಲ್ಲಿಸಿ ಬಿಲ್ಲನ್ನು ಮುರಿದು ಭಲ್ಲೆಯನ್ನು ಕಡಿದು ತುಂಡುಮಾಡಿ ರಥಗಳನ್ನು ಬೆಂಕಿಯಿಂದ ಸುಡುತ್ತಾನೆ.
46:10b.PSA.046.010 ಶಾಂತ ವಾಗಿರ್ರಿ, ನಾನೇ ದೇವರಾಗಿದ್ದೇನೆಂದು ತಿಳುಕೊಳ್ಳಿರಿ; ಜನಾಂಗಗಳಲ್ಲಿ ಉನ್ನತನಾಗಿರುವೆನು; ಭೂಮಿಯಲ್ಲಿ ನಾನು ಹೆಚ್ಚಿಸಲ್ಪಡುವೆನು.ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
46:11b.PSA.046.011 ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
47
47:1b.PSA.047.001 ಎಲ್ಲಾ ಜನರೇ, ನೀವು ನಿಮ್ಮ ಕೈಗಳನ್ನು ತಟ್ಟಿರಿ; ಜಯಾರ್ಭಟದಿಂದ ದೇವರಿಗೆ ಧ್ವನಿಗೈಯಿರಿ.
47:2b.PSA.047.002 ಮಹೋನ್ನತನಾದ ಕರ್ತನು ಭಯಂಕ ರನೂ ಭೂಮಿಯ ಮೇಲೆಲ್ಲಾ ಮಹಾಅರಸನೂ ಆಗಿದ್ದಾನೆ.
47:3b.PSA.047.003 ಜನರನ್ನು ನಮ್ಮ ಕೆಳಗೂ ಜನಾಂಗಗಳನ್ನು ನಮ್ಮ ಪಾದಗಳ ಕೆಳಗೂ ಅಧೀನ ಮಾಡಿದ್ದಾನೆ.
47:4b.PSA.047.004 ಆತನು ಪ್ರೀತಿಮಾಡುವ ಯಾಕೋಬನ ಘನತೆಯಾದ ನಮ್ಮ ಬಾಧ್ಯತೆಯನ್ನು ಆದುಕೊಳ್ಳುತ್ತಾನೆ--ಸೆಲಾ.
47:5b.PSA.047.005 ದೇವರು ಮಹಾಧ್ವನಿಯಿಂದ, ಕರ್ತನು ತುತೂ ರಿಯ ಶಬ್ದದಿಂದ, ಮೇಲೆ ಹೋಗಿದ್ದಾನೆ.
47:6b.PSA.047.006 ದೇವರಿಗೆ ಸ್ತುತಿಗಳನ್ನು ಹಾಡಿರಿ, ಸ್ತುತಿಗಳನ್ನು ಹಾಡಿರಿ; ನಮ್ಮ ಅರಸನಿಗೆ ಸ್ತುತಿಗಳನ್ನು ಹಾಡಿರಿ, ಸ್ತುತಿಗಳನ್ನು ಹಾಡಿರಿ;
47:7b.PSA.047.007 ದೇವರು ಭೂಮಿಗೆಲ್ಲಾ ಅರಸನು; ತಿಳುವಳಿಕೆಯಿಂದ ಸ್ತುತಿಗಳನ್ನು ಹಾಡಿರಿ.
47:8b.PSA.047.008 ಅನ್ಯಜನಾಂಗವನ್ನು ಆಳುತ್ತಾನೆ; ತನ್ನ ಪರಿಶುದ್ಧ ಸಿಂಹಾಸನದಲ್ಲಿ ಕೂತಿದ್ದಾನೆ.ಜನರ ಅಧಿಪತಿಗಳು ಅಬ್ರಹಾಮನ ದೇವರ ಪ್ರಜೆಯ ಸಂಗಡ ಕೂಡಿ ಕೊಂಡಿದ್ದಾರೆ; ಭೂಮಿಯ ಗುರಾಣಿಗಳು ದೇವರ ವಶದಲ್ಲಿವೆ; ಆತನು ಬಹಳವಾಗಿ ಹೆಚ್ಚಿಸಲ್ಪಟ್ಟಿದ್ದಾನೆ.
47:9b.PSA.047.009 ಜನರ ಅಧಿಪತಿಗಳು ಅಬ್ರಹಾಮನ ದೇವರ ಪ್ರಜೆಯ ಸಂಗಡ ಕೂಡಿ ಕೊಂಡಿದ್ದಾರೆ; ಭೂಮಿಯ ಗುರಾಣಿಗಳು ದೇವರ ವಶದಲ್ಲಿವೆ; ಆತನು ಬಹಳವಾಗಿ ಹೆಚ್ಚಿಸಲ್ಪಟ್ಟಿದ್ದಾನೆ.
48
48:1b.PSA.048.001 ನಮ್ಮ ದೇವರ ಪಟ್ಟಣದಲ್ಲಿ ಆತನ ಪರಿಶುದ್ಧ ಪರ್ವತದಲ್ಲಿ ಕರ್ತನು ದೊಡ್ಡ ವನೂ ಬಹಳವಾಗಿ ಸ್ತುತಿಸಲ್ಪಡುವಾತನೂ ಆಗಿದ್ದಾನೆ.
48:2b.PSA.048.002 ಉತ್ತರದ ಪಾರ್ಶ್ವಗಳಲ್ಲಿ ದೊಡ್ಡ ಅರಸನ ಪಟ್ಟಣವಾದ ಚೀಯೋನ್ ಪರ್ವತವು ರಮಣೀಯವಾ ದದ್ದೂ ಎಲ್ಲಾ ಭೂಮಿಗೆ ಸಂತೋಷಕರವಾದದ್ದೂ ಆಗಿದೆ.
48:3b.PSA.048.003 ದೇವರು ಅದರ ಅರಮನೆಗಳಲ್ಲಿ ಆಶ್ರಯ ವೆಂದು ಗೊತ್ತಾಗಿದೆ.
48:4b.PSA.048.004 ಇಗೋ, ಅರಸರುಗಳು ಕೂಡಿಕೊಂಡು ಒಟ್ಟಾಗಿ ಹಾದುಹೋದರು;
48:5b.PSA.048.005 ಅವರು ಅದನ್ನು ನೋಡಿ ಆಶ್ಚ ರ್ಯಪಟ್ಟರು; ಅವರು ಕಳವಳಪಟ್ಟು ಓಡಿ ಹೋದರು.
48:6b.PSA.048.006 ಭೀತಿಯೂ ಹೆರುವವಳ ಹಾಗೆ ನೋವೂ ಅಲ್ಲಿ ಅವರನ್ನು ಹಿಡಿಯಿತು.
48:7b.PSA.048.007 ಮೂಡಣ ಗಾಳಿಯಿಂದ ತಾರ್ಷಿಷ್ ಹಡಗುಗಳನ್ನು ನೀನು ಒಡೆಯುತ್ತೀ.
48:8b.PSA.048.008 ನಾವು ಹೇಗೆ ಕೇಳಿದೆವೋ ಹಾಗೆಯೇ ಸೈನ್ಯಗಳ ಕರ್ತನ ಪಟ್ಟಣದಲ್ಲಿ, ಅಂದರೆ ನಮ್ಮ ದೇವರ ಪಟ್ಟಣದಲ್ಲಿಯೇ ನೋಡಿದೆವು; ದೇವರು ಅದನ್ನು ಎಂದೆಂದಿಗೂ ಸ್ಥಿರಪಡಿಸುವನು. ಸೆಲಾ.
48:9b.PSA.048.009 ಓ ದೇವರೇ, ನಿನ್ನ ಪ್ರೀತಿ ಕರುಣೆಯನ್ನು ನಿನ್ನ ಮಂದಿರದ ಮಧ್ಯದಲ್ಲಿ ನಾವು ಸ್ಮರಿಸಿದ್ದೇವೆ.
48:10b.PSA.048.010 ಓ ದೇವರೇ, ನಿನ್ನ ಹೆಸರಿಗೆ ತಕ್ಕಂತಯೇ ನಿನ್ನ ಸ್ತೋತ್ರವು ಭೂಮಿಯ ಅಂತ್ಯಗಳ ವರೆಗೂ ಅದೆ. ನಿನ್ನ ಬಲಗೈ ನೀತಿಯಿಂದ ತುಂಬಿ ಅದೆ.
48:11b.PSA.048.011 ನಿನ್ನ ನ್ಯಾಯತೀರ್ವಿಕೆಗಳ ನಿಮಿತ್ತ ಚೀಯೋನ್ ಪರ್ವತವು ಸಂತೋಷಪಡಲಿ; ಯೆಹೂದದ ಕುಮಾರ್ತೆಯರು ಉಲ್ಲಾಸಪಡಲಿ.
48:12b.PSA.048.012 ಚೀಯೋನನ್ನು ಸುತ್ತಿ ಅವಳ ಸುತ್ತಲು ತಿರುಗಿ ಅದರ ಬುರುಜುಗಳನ್ನು ಲೆಕ್ಕಿಸಿರಿ.
48:13b.PSA.048.013 ಮುಂದಿನ ತಲಾಂತರಕ್ಕೆ ತಿಳಿಸುವದಕ್ಕೋಸ್ಕರ ಅದರ ಬುರುಜುಗಳ ಮೇಲೆ ಮನಸ್ಸಿಟ್ಟು ಆಕೆಯ ಅರಮನೆಗಳನ್ನು ಲಕ್ಷಿಸಿರಿ.ಈ ದೇವರು ಯುಗಯುಗಾಂತರಗಳಿಗೂ ನಮ್ಮ ದೇವ ರಾಗಿದ್ದಾನೆ. ಆತನು ಮರಣದ ವರೆಗೂ ನಮ್ಮನ್ನು ನಡಿಸುವನು.
48:14b.PSA.048.014 ಈ ದೇವರು ಯುಗಯುಗಾಂತರಗಳಿಗೂ ನಮ್ಮ ದೇವ ರಾಗಿದ್ದಾನೆ. ಆತನು ಮರಣದ ವರೆಗೂ ನಮ್ಮನ್ನು ನಡಿಸುವನು.
49
49:1b.PSA.049.001 ಎಲ್ಲಾ ಜನರೇ, ಇದನ್ನು ಕೇಳಿರಿ; ಭೂಲೋಕದ ನಿವಾಸಿಗಳಿರಾ, ಕೇಳಿರಿ;
49:2b.PSA.049.002 ಭೂಲೋಕದ ಜನರೇ, ಉಚ್ಚ ನೀಚ ಬಡವ ಬಲ್ಲಿದರೇ, ಕೇಳಿರಿ.
49:3b.PSA.049.003 ನನ್ನ ಬಾಯಿ ಜ್ಞಾನವನ್ನು ನುಡಿಯುವದು, ನನ್ನ ಹೃದಯದ ಧ್ಯಾನವು ವಿವೇಕವುಳ್ಳದ್ದಾಗಿರುವದು.
49:4b.PSA.049.004 ನಾನು ಸಾಮ್ಯವನ್ನು ಕಿವಿಗೊಟ್ಟು ಕೇಳಿ ಕಿನ್ನರಿಯನ್ನು ಬಾರಿಸುತ್ತಾ ಅದರ ಗೂಢಾರ್ಥವನ್ನು ಪ್ರಕಟಿಸುವೆನು.
49:5b.PSA.049.005 ನನ್ನ ದ್ರೋಹವು ನನ್ನನ್ನು ಸುತ್ತಿಕೊಳ್ಳುವಾಗ ಕೇಡಿನ ದಿನಗಳಲ್ಲಿ ನಾನು ಯಾಕೆ ಭಯಪಡಬೇಕು?
49:6b.PSA.049.006 ಅವರು ತಮ್ಮ ಸಂಪತ್ತಿನಲ್ಲಿ ಭರವಸವಿಟ್ಟು ಅಧಿಕ ಐಶ್ವರ್ಯಗಳಲ್ಲಿ ಹೆಚ್ಚಳಪಡುವರು.
49:7b.PSA.049.007 ಆದರೆ ಸದಾ ಕಾಲಕ್ಕೂ ಬದುಕಿರುವಂತೆ ಮಾಡಿ ಕೊಳೆಯುವಿಕೆಯನ್ನು ನೋಡದ ಹಾಗೆ ತನ್ನ ಸಹೋದರನನ್ನು ಯಾವ ಮನುಷ್ಯನೂ
49:8b.PSA.049.008 ಅವನು ದೇವರಿಗೆ ಹಣವನ್ನು (ಈಡು) ಕೊಟ್ಟು ಅದರಿಂದ ವಿಮೋಚಿಸಲಾರನು.
49:9b.PSA.049.009 ಅವರ ಪ್ರಾಣದ ವಿಮೋಚನೆಯು ಅಮೂಲ್ಯ ವಾಗಿದೆ; ಅದು ಯುಗಯುಗಕ್ಕೂ ನಿಲ್ಲುವದು.
49:10b.PSA.049.010 ಜ್ಞಾನಿಗಳು ಸಾಯುವರು; ಹುಚ್ಚನು ಪಶುಪ್ರಾಯನು ಕೂಡ ನಾಶವಾಗಿ ಬೇರೆಯವರಿಗೆ ತಮ್ಮ ಆಸ್ತಿಯನ್ನು ಬಿಡುವದನ್ನು ಅವನು ನೋಡುತ್ತಾನೆ.
49:11b.PSA.049.011 ತಮ್ಮ ಮನೆಗಳು ಯುಗಯುಗಕ್ಕೂ ತಮ್ಮ ನಿವಾಸಗಳು ತಲತಲಾಂತರಕ್ಕೂ ಇರಬೇಕೆಂದು ಅಂತರ್ಯದಲ್ಲಿ ಯೋಚಿಸಿ ಭೂಮಿಗಳಿಗೆ ತಮ್ಮ ಹೆಸರುಗಳನ್ನು ಇಡು ತ್ತಾರೆ.
49:12b.PSA.049.012 ಮನುಷ್ಯನು ಘನವುಳ್ಳವನಾದರೂ ಸ್ಥಿರವಿಲ್ಲ; ಅವನು ನಾಶವಾಗುವ ಪಶುಗಳ ಹಾಗೆ ಇದ್ದಾನೆ.
49:13b.PSA.049.013 ಅವರ ಈ ಮಾರ್ಗವು ಅವರ ಹುಚ್ಚುತನ ವಾಗಿದೆ; ಆದರೆ ಅವರ ಸಂತಾನದವರು ಅವರ ಮಾತುಗಳನ್ನು ಮೆಚ್ಚುತ್ತಾರೆ. ಸೆಲಾ.
49:14b.PSA.049.014 ಅವರು ಕುರಿ ಗಳಂತೆ ಸಮಾಧಿಯಲ್ಲಿ ಹಾಕಲ್ಪಡುತ್ತಾರೆ; ಮರಣವು ಅವರನ್ನು ತಿನ್ನುತ್ತದೆ; ಯಥಾರ್ಥರು ಬೆಳಿಗ್ಗೆ ಅವರ ಮೇಲೆ ಆಳುವರು; ಅವರಿಗೆ ನಿವಾಸವಿರದ ಹಾಗೆ ಸಮಾಧಿಯಲ್ಲಿ ಅವರ ರೂಪವು ಕ್ಷಯಿಸುವದು.
49:15b.PSA.049.015 ಆದರೆ ದೇವರು ನನ್ನ ಪ್ರಾಣವನ್ನು ಸಮಾಧಿಯ ಬಲದಿಂದ ವಿಮೋಚನೆ ಮಾಡುವನು, ಆತನು ನನ್ನನ್ನು ಅಂಗೀಕರಿಸುವನು. ಸೆಲಾ.
49:16b.PSA.049.016 ಒಬ್ಬನು ಐಶ್ವರ್ಯವಂತ ನಾದರೆ ಮತ್ತು ಅವನ ಮನೆಯ ಘನವು ದೊಡ್ಡದಾ ದರೆ ಭಯಪಡಬೇಡ.
49:17b.PSA.049.017 ಅವನು ಸಾಯುವಾಗ ಏನೂ ತೆಗೆದುಕೊಂಡು ಹೋಗನು; ಅವನ ಘನವು ಅವನ ಹಿಂದೆ ಇಳಿದು ಹೋಗದು.
49:18b.PSA.049.018 ಅವನು ಬದುಕಿದ್ದಾಗ ತನ್ನ ಪ್ರಾಣವನ್ನು ಸ್ತುತಿಸಿಕೊಂಡಾಗ್ಯೂ ನೀನು ನಿನಗೆ ಒಳ್ಳೇದನ್ನು ಮಾಡಿಕೊಂಡರೆ ಜನರು ನಿನ್ನನ್ನು ಕೊಂಡಾ ಡುವರು.
49:19b.PSA.049.019 ಅವನು ತನ್ನ ತಂದೆಗಳ ವಂಶದ ಬಳಿಗೆ ಹೋಗುವನು; ಅವರು ಬೆಳಕನ್ನು ಎಂದಿಗೂ ನೋಡು ವದಿಲ್ಲ.ಮನುಷ್ಯನು ಘನತೆಯಲ್ಲಿದ್ದು ವಿವೇಕ ವಿಲ್ಲದವನಾದರೆ ಮಡಿದು ಹೋಗುವ ಪಶುಗಳಿಗೆ ಸಮಾನನಾಗಿದ್ದಾನೆ.
49:20b.PSA.049.020 ಮನುಷ್ಯನು ಘನತೆಯಲ್ಲಿದ್ದು ವಿವೇಕ ವಿಲ್ಲದವನಾದರೆ ಮಡಿದು ಹೋಗುವ ಪಶುಗಳಿಗೆ ಸಮಾನನಾಗಿದ್ದಾನೆ.
50
50:1b.PSA.050.001 ಬಲಿಷ್ಠ ದೇವರಾಗಿರುವ ಕರ್ತನು ತಾನೇ ಮಾತನಾಡಿ ಸೂರ್ಯೋದಯದಿಂದ ಅಸ್ತಮಾನದ ವರೆಗೂ ಭೂನಿವಾಸಿಗಳನ್ನು ಕರೆದಿದ್ದಾನೆ.
50:2b.PSA.050.002 ಸೌಂದರ್ಯದ ಪರಿಪೂರ್ಣತೆಯಾದ ಚೀಯೋನಿ ನಿಂದ ದೇವರು ಪ್ರಕಾಶಿಸಿದ್ದಾನೆ.
50:3b.PSA.050.003 ನಮ್ಮ ದೇವರು ಬರುತ್ತಾನೆ, ಮೌನವಾಗಿರನು; ಬೆಂಕಿಯು ಆತನ ಮುಂದೆ ದಹಿಸುವದು; ಅದು ಆತನ ಸುತ್ತಲು ದೊಡ್ಡ ಬಿರುಗಾಳಿಯಂತಿರುವದು.
50:4b.PSA.050.004 ತನ್ನ ಜನರಿಗೆ ನ್ಯಾಯ ತೀರಿಸುವದಕ್ಕೆ ಮೇಲಿನಿಂದ ಆಕಾಶಗಳನ್ನೂ ಭೂಮಿ ಯನ್ನೂ ಕರೆಯುತ್ತಾನೆ.
50:5b.PSA.050.005 ಯಜ್ಞದಿಂದ ನನ್ನ ಸಂಗಡ ಒಡಂಬಡಿಕೆ ಮಾಡಿದ ನನ್ನ ಪರಿಶುದ್ಧರನ್ನು ನನ್ನ ಬಳಿಗೆ ಒಟ್ಟುಗೂಡಿಸಿರಿ.
50:6b.PSA.050.006 ಆಕಾಶಗಳು ಆತನ ನೀತಿ ಯನ್ನು ಪ್ರಕಟಿಸುತ್ತವೆ; ದೇವರು ತಾನೇ ನ್ಯಾಯಾಧಿ ಪತಿಯಾಗಿದ್ದಾನೆ. ಸೆಲಾ.
50:7b.PSA.050.007 ಓ ನನ್ನ ಜನರೇ, ಕೇಳಿರಿ, ನಾನು ನುಡಿಯುವೆನು; ಓ ಇಸ್ರಾಯೇಲೇ, ನಿನಗೆ ವಿರೋಧವಾಗಿ ನಾನು ಸಾಕ್ಷಿಕೊಡುವೆನು; ನಾನು ದೇವರು, ಹೌದು ನಿನ್ನ ದೇವರು ನಾನೇ.
50:8b.PSA.050.008 ನಿನ್ನ ಬಲಿಗಳಿಗೋಸ್ಕರ ಇಲ್ಲವೆ ನಿನ್ನ ದಹನಬಲಿಗೋಸ್ಕರ ನಾನು ನಿನ್ನನ್ನು ಗದರಿಸುವ ದಿಲ್ಲ; ಅವು ಯಾವಾಗಲೂ ನನ್ನ ಮುಂದೆ ಇವೆ.
50:9b.PSA.050.009 ನಿನ್ನ ಮನೆಯಿಂದ ಹೋರಿಯನ್ನೂ ಇಲ್ಲವೆ ನಿನ್ನ ದೊಡ್ಡಿಗಳಿಂದ ಹೋತಗಳನ್ನೂ ತೆಗೆದುಕೊಳ್ಳೆನು.
50:10b.PSA.050.010 ಅಡವಿಯ ಮೃಗಗಳೆಲ್ಲವೂ ಬೆಟ್ಟಗಳಲ್ಲಿರುವ ಸಾವಿರ ಪಶುಗಳೂ ನನ್ನವೇ.
50:11b.PSA.050.011 ಬೆಟ್ಟಗಳ ಪಕ್ಷಿಗಳನ್ನೆಲ್ಲಾ ನಾನು ಬಲ್ಲೆನು; ಕಾಡುಮೃಗಗಳು ನನ್ನವುಗಳಾಗಿವೆ.
50:12b.PSA.050.012 ನಾನು ಹಸಿದಿದ್ದರೆ ನಿನಗೆ ಹೇಳೆನು; ಭೂಲೋಕವೂ ಅದರ ಪರಿಪೂರ್ಣತೆಯೂ ನನ್ನವೇ.
50:13b.PSA.050.013 ಹೋರಿಗಳ ಮಾಂಸವನ್ನು ತಿನ್ನುವೆನೋ ಇಲ್ಲವೆ ಹೋತಗಳ ರಕ್ತವನ್ನು ಕುಡಿಯುವೆನೋ?
50:14b.PSA.050.014 ದೇವರಿಗೆ ಸ್ತೋತ್ರವನ್ನು (ಬಲಿ ಯಾಗಿ) ಅರ್ಪಿಸು; ಮಹೋನ್ನತನಿಗೆ ನಿನ್ನ ಪ್ರಮಾಣ ಗಳನ್ನು ಸಲ್ಲಿಸು.
50:15b.PSA.050.015 ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
50:16b.PSA.050.016 ಆದರೆ ದುಷ್ಟನಿಗೆ ದೇವರು ಹೇಳುವದೇನಂದರೆ --ನನ್ನ ನಿಯಮಗಳನ್ನು ಪ್ರಕಟಿಸುವದು ನಿನಗೇನು? ಇಲ್ಲವೆ ನನ್ನ ಒಡಂಬಡಿಕೆಯನ್ನು ನಿನ್ನ ಬಾಯಲ್ಲಿ ಉಚ್ಚರಿಸುವದೇಕೆ?
50:17b.PSA.050.017 ನೀನು ಶಿಕ್ಷಣವನ್ನು ಹಗೆಮಾಡಿ ನನ್ನ ವಾಕ್ಯಗಳನ್ನು ನಿನ್ನ ಹಿಂದೆ ಹಾಕುತ್ತೀಯಲ್ಲಾ.
50:18b.PSA.050.018 ಕಳ್ಳನನ್ನು ನೋಡಿದರೆ ಅವನೊಂದಿಗೆ ಒಪ್ಪುತ್ತೀ; ಜಾರರ ಸಂಗಡ ನಿನ್ನ ಪಾಲು ಇದೆ.
50:19b.PSA.050.019 ನೀನು ನಿನ್ನ ಬಾಯನ್ನು ಕೇಡಿಗೆ ಒಪ್ಪಿಸುತ್ತೀ; ನಿನ್ನ ನಾಲಿಗೆಯು ಮೋಸವನ್ನು ಜೋಡಿಸುತ್ತದೆ.
50:20b.PSA.050.020 ನೀನು ಕೂತು ಕೊಂಡು ನಿನ್ನ ಸಹೋದರನಿಗೆ ವಿರೋಧವಾಗಿ ನುಡಿ ಯುತ್ತೀ; ನಿನ್ನ ಸ್ವಂತ ಒಡಹುಟ್ಟಿದವನ ಮೇಲೆ ಚಾಡಿ ಹೇಳುತ್ತೀ.
50:21b.PSA.050.021 ಇವುಗಳನ್ನು ನೀನು ಮಾಡಿದಾಗ್ಯೂ ನಾನು ಮೌನವಾಗಿದ್ದೆನು; ಆದದರಿಂದ ನಾನೂ ಸಹ ನಿನ್ನ ಹಾಗೆ ಒಬ್ಬನೆಂದು ನೀನು ನೆನಸಿದಿ; ಆದರೆ ನಾನು ನಿನ್ನನ್ನು ಗದರಿಸಿ ನಿನ್ನ ಕಣ್ಣುಗಳ ಮುಂದೆ ಈ ಕೃತ್ಯಗಳನ್ನು ಕ್ರಮವಾಗಿಡುವೆನು.
50:22b.PSA.050.022 ದೇವರನ್ನು ಮರೆತು ಬಿಡುವವರೇ, ನಾನು ನಿಮ್ಮನ್ನು ಹರಿದು ಚೂರುಮಾಡ ದಂತೆ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವವರು ಯಾರೂ ಇರುವದಿಲ್ಲವೆಂಬದನ್ನು ಗ್ರಹಿಸಿಕೊಳ್ಳಿರಿ.ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.
50:23b.PSA.050.023 ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.
51
51:1b.PSA.051.001 ಓ ದೇವರೇ, ನನ್ನ ಮೇಲೆ ಕರುಣೆಯಿಡು; ನಿನ್ನ ಪ್ರೀತಿಕರುಣೆಯ ಪ್ರಕಾರ ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ದ್ರೋಹ ಗಳನ್ನು ಅಳಿಸಿಬಿಡು.
51:2b.PSA.051.002 ನನ್ನ ಅಕ್ರಮದಿಂದ ನನ್ನನ್ನು ಪೂರ್ಣವಾಗಿ ತೊಳೆ; ನನ್ನ ಪಾಪದಿಂದ ನನ್ನನ್ನು ಶುದ್ಧಿಮಾಡು.
51:3b.PSA.051.003 ನನ್ನ ದ್ರೋಹಗಳನ್ನು ನಾನು ಒಪ್ಪಿ ಕೊಳ್ಳುತ್ತೇನೆ; ನನ್ನ ಪಾಪವು ಯಾವಾಗಲೂ ನನ್ನ ಮುಂದೆ ಇದೆ.
51:4b.PSA.051.004 ನೀನು ನಿನ್ನ ಮಾತುಗಳಲ್ಲಿ ನೀತಿವಂತ ನಾಗಿಯೂ ನಿನ್ನ ನ್ಯಾಯತೀರ್ವಿಕೆಯಲ್ಲಿ ನಿರ್ಮಲನಾ ಗಿಯೂ ಇದ್ದಿಯಲ್ಲಾ; ನಿನಗೆ ಮಾತ್ರವೇ ವಿರೋಧ ವಾಗಿ ನಾನು ಪಾಪಮಾಡಿ ನಿನ್ನ ದೃಷ್ಟಿಯಲ್ಲಿ ಈ ಕೆಟ್ಟದ್ದನ್ನು ಮಾಡಿದ್ದೇನೆ.
51:5b.PSA.051.005 ಇಗೋ, ನಾನು ಅಕ್ರ ಮದಲ್ಲಿ ರೂಪಿಸಲ್ಪಟ್ಟೆನು; ಪಾಪದಲ್ಲಿ ನನ್ನ ತಾಯಿ ನನ್ನನ್ನು ಗರ್ಭಧರಿಸಿದಳು.
51:6b.PSA.051.006 ಇಗೋ, ಅಂತರಂಗದಲ್ಲಿ ನೀನು ಸತ್ಯವನ್ನು ಅಪೇಕ್ಷಿಸುತ್ತೀ; ರಹಸ್ಯದಲ್ಲಿ ನನಗೆ ಜ್ಞಾನವನ್ನು ನೀನು ತಿಳಿಯಮಾಡು.
51:7b.PSA.051.007 ಹಿಸ್ಸೋಪ್‌ನಿಂದ ನನ್ನನ್ನು ತೊಳೆ; ಆಗ ನಾನು ಶುಚಿಯಾಗುವೆನು. ನನ್ನನ್ನು ತೊಳೆ, ಆಗ ಹಿಮಕ್ಕಿಂತ ಬಿಳುಪಾಗುವೆನು.
51:8b.PSA.051.008 ನಾನು ಉತ್ಸಾಹವನ್ನೂ ಸಂತೋಷವನ್ನೂ ಕೇಳುವ ಹಾಗೆ ಮಾಡು. ಆಗ ನನ್ನ ಮುರಿದ ಎಲುಬುಗಳು ಆನಂದಿಸುವವು.
51:9b.PSA.051.009 ನನ್ನ ಪಾಪಗಳನ್ನು ನೋಡದಂತೆ ನೀನು ವಿಮುಖನಾಗು; ನನ್ನ ಅಕ್ರಮಗಳನ್ನೆಲ್ಲಾ ಅಳಿಸಿ ಬಿಡು.
51:10b.PSA.051.010 ಓ ದೇವರೇ, ಶುದ್ಧಹೃದಯವನ್ನು ನನ್ನಲ್ಲಿ ಸೃಷ್ಟಿಸು, ಸ್ಥಿರವಾದ ಆತ್ಮವನ್ನು ನನ್ನ ಅಂತರಂಗದಲ್ಲಿ ನೂತನಪಡಿಸು.
51:11b.PSA.051.011 ನಿನ್ನ ಸಮ್ಮುಖದಿಂದ ನನ್ನನ್ನು ಹೊರಗೆ ಹಾಕಬೇಡ; ನಿನ್ನ ಪರಿಶುದ್ಧಾತ್ಮನನ್ನು ನನ್ನಿಂದ ತೆಗೆದುಕೊಳ್ಳಬೇಡ.
51:12b.PSA.051.012 ನಿನ್ನ ರಕ್ಷಣೆಯ ಆನಂದವನ್ನು ನನಗೆ ತಿರುಗಿಕೊಡು; ನಿನ್ನ ಸಿದ್ಧಮನಸ್ಸಿನಿಂದ ನನ್ನನ್ನು ಮೇಲೆತ್ತು.
51:13b.PSA.051.013 ಆಗ ದ್ರೋಹಿಗಳಿಗೆ ನಿನ್ನ ಮಾರ್ಗಗಳನ್ನು ಕಲಿಸುವೆನು; ಪಾಪಾತ್ಮರು ನಿನ್ನ ಕಡೆಗೆ ತಿರುಗುವರು.
51:14b.PSA.051.014 ಓ ದೇವರೇ, ನನ್ನ ರಕ್ಷಣೆಯ ದೇವರೇ, ರಕ್ತಾಪರಾಧ ದಿಂದ ನೀನು ನನ್ನನ್ನು ಬಿಡಿಸು; ಆಗ ನನ್ನ ನಾಲಿಗೆಯು ನಿನ್ನ ನೀತಿಯನ್ನು ಗಟ್ಟಿಯಾಗಿ ಹಾಡುವದು.
51:15b.PSA.051.015 ಓ ಕರ್ತನೇ, ನನ್ನ ತುಟಿಗಳನ್ನು ತೆರೆ; ಆಗ ನನ್ನ ಬಾಯಿ ನಿನ್ನ ಸ್ತೋತ್ರವನ್ನು ಪ್ರಕಟಮಾಡುವದು.
51:16b.PSA.051.016 ಯಜ್ಞ ವನ್ನು ನೀನು ಇಷ್ಟಪಡುದಿಲ್ಲ. ಇಲ್ಲವಾದರೆ ನಾನು ಅದನ್ನು ಕೊಡುತ್ತಿದ್ದೆನು. ದಹನಬಲಿಯಲ್ಲಿ ನೀನು ಸಂತೋಷಪಡುವದಿಲ್ಲ.
51:17b.PSA.051.017 ಮುರಿದ ಮನಸ್ಸೇ ದೇವರ ಯಜ್ಞಗಳು. ಓ ದೇವರೇ, ಪಶ್ಚಾತ್ತಾಪದಿಂದ ಜಜ್ಜಿ ಹೋದ ಮನಸ್ಸನ್ನು ನೀನು ತಿರಸ್ಕರಿಸುವದಿಲ್ಲ.
51:18b.PSA.051.018 ನಿನ್ನ ದಿವ್ಯ ಚಿತ್ತದ ಪ್ರಕಾರ ಚೀಯೋನಿಗೆ ಒಳ್ಳೇದು ಮಾಡು; ಯೆರೂಸಲೇಮಿನ ಗೋಡೆಗಳನ್ನು ಕಟ್ಟು.ಆಗ ನೀತಿಯ ಯಜ್ಞಗಳಲ್ಲಿಯೂ ದಹನ ಬಲಿಯಲ್ಲಿಯೂ ಪೂರ್ಣವಾದ ದಹನಬಲಿಯ ಲ್ಲಿಯೂ ನೀನು ಸಂತೋಷಪಡುವಿ; ಆಗ ನಿನ್ನ ಬಲಿ ಪೀಠದ ಮೇಲೆ ಅವರು ಹೋರಿಗಳನ್ನು ಅರ್ಪಿಸುವರು.
51:19b.PSA.051.019 ಆಗ ನೀತಿಯ ಯಜ್ಞಗಳಲ್ಲಿಯೂ ದಹನ ಬಲಿಯಲ್ಲಿಯೂ ಪೂರ್ಣವಾದ ದಹನಬಲಿಯ ಲ್ಲಿಯೂ ನೀನು ಸಂತೋಷಪಡುವಿ; ಆಗ ನಿನ್ನ ಬಲಿ ಪೀಠದ ಮೇಲೆ ಅವರು ಹೋರಿಗಳನ್ನು ಅರ್ಪಿಸುವರು.
52
52:1b.PSA.052.001 ಓ ಪರಾಕ್ರಮಿಯೇ, ಕೆಟ್ಟತನದಲ್ಲಿ ನಿನ್ನ ಷ್ಟಕ್ಕೆ ನೀನೇ ಹೆಚ್ಚಳಪಡುವದು ಯಾಕೆ? ದೇವರ ಒಳ್ಳೇತನವು ಯಾವಾಗಲೂ ಇರುವದು.
52:2b.PSA.052.002 ಮೋಸ ಮಾಡುವ ಹದವಾದ ಕತ್ತಿಯ ಹಾಗೆ ನಿನ್ನ ನಾಲಿಗೆಯು ಕೇಡುಗಳನ್ನು ಕಲ್ಪಿಸುತ್ತದೆ.
52:3b.PSA.052.003 ಒಳ್ಳೇದಕ್ಕಿಂತ ಕೆಟ್ಟದ್ದನ್ನೂ ನೀತಿಯನ್ನು ಮಾತನಾಡುವದಕ್ಕಿಂತ ಸುಳ್ಳನ್ನೂ ಪ್ರೀತಿ ಮಾಡುತ್ತೀ ಸೆಲಾ.
52:4b.PSA.052.004 ಓ ಮೋಸದ ನಾಲಿಗೆಯೇ, ನೀನು ನುಂಗಿಬಿಡುವ ಮಾತುಗಳನ್ನೆಲ್ಲಾ ಪ್ರೀತಿ ಮಾಡುತ್ತೀ.
52:5b.PSA.052.005 ಆದದರಿಂದ ದೇವರು ಅದೇ ರೀತಿಯಲ್ಲಿ ನಿನ್ನನ್ನು ಸದಾಕಾಲಕ್ಕೂ ನಾಶಮಾಡಿ, ತೆಗೆದುಬಿಡುವನು. ನಿನ್ನ ವಾಸಸ್ಥಳದಿಂದ ಕಿತ್ತುಹಾಕುವನು; ಜೀವಿತರ ದೇಶ ದೊಳಗಿಂದ ನಿನ್ನನ್ನು ಬೇರುಸಹಿತ ಕೀಳುವನು. ಸೆಲಾ.
52:6b.PSA.052.006 ನೀತಿವಂತರು ಸಹ ಭಯಪಟ್ಟು ಅವನನ್ನು ನೋಡಿ ನಗುವರು.
52:7b.PSA.052.007 ಇಗೋ, ದೇವರನ್ನು ತನ್ನ ಬಲವಾಗಿ ಆಶ್ರಯಿಸದೆ ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ಕೆಟ್ಟತನದಲ್ಲಿ ಬಲಗೊಂಡ ಮನುಷ್ಯನು ಇವನೇ.
52:8b.PSA.052.008 ಆದರೆ ನಾನು ದೇವರ ಆಲಯದಲ್ಲಿರುವ ಹಸು ರಾದ ಇಪ್ಪೇ ಮರದಹಾಗೆ ಇದ್ದೇನೆ. ದೇವರ ಕರು ಣೆಯಲ್ಲಿ ಯುಗಯುಗಾಂತರಗಳಲ್ಲಿಯೂ ನಾನು ಭರವಸವಿಟ್ಟಿದ್ದೇನೆ.ನಾನು ಎಂದೆಂದಿಗೂ ನಿನ್ನನ್ನು ಕೊಂಡಾಡುವೆನು; ನೀನು ಅದನ್ನು ಮಾಡಿದಿ; ನಿನ್ನ ಹೆಸರನ್ನು ನಿರೀಕ್ಷಿಸುವೆನು; ನಿನ್ನ ಪರಿಶುದ್ಧರ ಮುಂದೆ ಅದು ಒಳ್ಳೇದಾಗಿದೆ.
52:9b.PSA.052.009 ನಾನು ಎಂದೆಂದಿಗೂ ನಿನ್ನನ್ನು ಕೊಂಡಾಡುವೆನು; ನೀನು ಅದನ್ನು ಮಾಡಿದಿ; ನಿನ್ನ ಹೆಸರನ್ನು ನಿರೀಕ್ಷಿಸುವೆನು; ನಿನ್ನ ಪರಿಶುದ್ಧರ ಮುಂದೆ ಅದು ಒಳ್ಳೇದಾಗಿದೆ.
53
53:1b.PSA.053.001 ದೇವರಿಲ್ಲವೆಂದು ಮೂರ್ಖನು ತನ್ನ ಹೃದಯದಲ್ಲಿ ಅಂದುಕೊಂಡಿದ್ದಾನೆ. ಅವರು ಕೆಟ್ಟುಹೋಗಿ ಅಸಹ್ಯವಾದ ಅಪರಾಧವನ್ನು ಮಾಡಿದ್ದಾರೆ; ಒಳ್ಳೇದನ್ನು ಮಾಡುವವನು ಯಾವನೂ ಇಲ್ಲ.
53:2b.PSA.053.002 ದೇವರನ್ನು ಹುಡುಕುವ ಬುದ್ಧಿವಂತನು ಇದ್ದಾನೋ ಎಂದು ನೋಡುವದಕ್ಕೆ ದೇವರು ಆಕಾ ಶದಿಂದ ಮನುಷ್ಯರೆಲ್ಲರನ್ನು ದೃಷ್ಟಿಸಿ ನೋಡಿದಾಗ
53:3b.PSA.053.003 ಎಲ್ಲರು ಹಿಂದಿರುಗಿದ್ದಾರೆ; ಒಟ್ಟಾಗಿ ಹೊಲೆಯಾಗಿ ದ್ದಾರೆ. ಒಳ್ಳೇದನ್ನು ಮಾಡುವವನು ಇಲ್ಲ, ಒಬ್ಬನಾ ದರೂ ಇಲ್ಲ.
53:4b.PSA.053.004 ರೊಟ್ಟಿತಿನ್ನುವ ಪ್ರಕಾರ ನನ್ನ ಜನರನ್ನು ತಿಂದು ದೇವರನ್ನು ಸ್ಮರಿಸದೆ ಅಪರಾಧಮಾಡುವವರು ಅರಿ ಯರೋ?
53:5b.PSA.053.005 ಭಯವಿಲ್ಲದಿರುವಲ್ಲಿ ಅವರು ಭಯ ಭ್ರಾಂತರಾದರು; ನಿನಗೆ ವಿರೋಧವಾಗಿ ದಂಡು ಇಳಿ ಸುವವನ ಎಲುಬುಗಳನ್ನು ದೇವರು ಚದರಿಸಿ ಬಿಟ್ಟಿ ದ್ದಾನೆ. ನೀನು ಅವರನ್ನು ನಾಚಿಕೆಪಡಿಸಿದ್ದೀ; ದೇವರು ಅವರನ್ನು ತಿರಸ್ಕರಿಸಿದ್ದಾನೆ.ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬಂದರೆ ಎಷ್ಟೋ ಒಳ್ಳೇದು. ದೇವರು ತನ್ನ ಜನರನ್ನು ಸೆರೆಯಿಂದ ತಿರುಗಿ ಬರಮಾಡುವಾಗ ಯಾಕೋಬನು ಉಲ್ಲಾಸಿಸುವನು, ಇಸ್ರಾಯೇಲನು ಸಂತೋಷಿ ಸುವನು.
53:6b.PSA.053.006 ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬಂದರೆ ಎಷ್ಟೋ ಒಳ್ಳೇದು. ದೇವರು ತನ್ನ ಜನರನ್ನು ಸೆರೆಯಿಂದ ತಿರುಗಿ ಬರಮಾಡುವಾಗ ಯಾಕೋಬನು ಉಲ್ಲಾಸಿಸುವನು, ಇಸ್ರಾಯೇಲನು ಸಂತೋಷಿ ಸುವನು.
54
54:1b.PSA.054.001 ಓ ದೇವರೇ, ನಿನ್ನ ಹೆಸರಿನಿಂದ ನನ್ನನ್ನು ರಕ್ಷಿಸಿ ನಿನ್ನ ಬಲದಿಂದ ನನಗೆ ನ್ಯಾಯ ತೀರಿಸು.
54:2b.PSA.054.002 ಓ ದೇವರೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ಬಾಯಿಯ ಮಾತುಗಳಿಗೆ ಕಿವಿಗೊಡು.
54:3b.PSA.054.003 ಅನ್ಯರು ನನಗೆ ವಿರೋಧವಾಗಿ ಎದ್ದಿದ್ದಾರೆ; ಬಲಾ ತ್ಕಾರಿಗಳು ನನ್ನ ಪ್ರಾಣವನ್ನು ಹುಡುಕುತ್ತಾರೆ; ಅವರು ದೇವರನ್ನು ತಮ್ಮ ಮುಂದೆ ಇಟ್ಟುಕೊಳ್ಳಲಿಲ್ಲ. ಸೆಲಾ.
54:4b.PSA.054.004 ಇಗೋ, ದೇವರು ನನ್ನ ಸಹಾಯಕನು; ಕರ್ತನು ನನ್ನ ಪ್ರಾಣವನ್ನು ಉದ್ಧಾರ ಮಾಡುವವರ ಸಂಗಡ ಇದ್ದಾನೆ.
54:5b.PSA.054.005 ನನ್ನ ವಿರೋಧಿಗಳಿಗೆ ಆತನು ಕೇಡನ್ನು ಬದಲು ಕೊಡುವನು; ನಿನ್ನ ಸತ್ಯದಿಂದ ಅವರನ್ನು ಸಂಹರಿಸು.
54:6b.PSA.054.006 ನಾನು ನಿನಗೆ ಉಚಿತವಾಗಿ ಬಲಿಯನ್ನು ಅರ್ಪಿಸುವೆನು. ಓ ಕರ್ತನೇ, ನಿನ್ನ ಹೆಸರನ್ನು ಕೊಂಡಾ ಡುವೆನು, ಅದು ಒಳ್ಳೇದು.ಎಲ್ಲಾ ಇಕ್ಕಟ್ಟಿನಿಂದ ಆತನು ನನ್ನನ್ನು ಬಿಡಿಸಿದ್ದಾನೆ; ನನ್ನ ಶತ್ರುವಿನ ಗತಿ ಯನ್ನು ನೋಡಿ ನನ್ನ ಕಣ್ಣು ಸಂತೋಷಿಸುತ್ತದೆ.
54:7b.PSA.054.007 ಎಲ್ಲಾ ಇಕ್ಕಟ್ಟಿನಿಂದ ಆತನು ನನ್ನನ್ನು ಬಿಡಿಸಿದ್ದಾನೆ; ನನ್ನ ಶತ್ರುವಿನ ಗತಿ ಯನ್ನು ನೋಡಿ ನನ್ನ ಕಣ್ಣು ಸಂತೋಷಿಸುತ್ತದೆ.
55
55:1b.PSA.055.001 ಓ ದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡು; ನನ್ನ ವಿಜ್ಞಾಪನೆಗೆ ನಿನ್ನನ್ನು ಮರೆಮಾಡಿಕೊಳ್ಳಬೇಡ.
55:2b.PSA.055.002 ನನ್ನನ್ನು ಆಲೈಸಿ ನನಗೆ ಕಿವಿಗೊಡು; ನನ್ನ ಚಿಂತೆಯಲ್ಲಿ ನಾನು ದುಃಖಿಸುತ್ತಾ
55:3b.PSA.055.003 ಶತ್ರುವಿನ ಶಬ್ದಕ್ಕೋಸ್ಕರವೂ ದುಷ್ಟನ ಉಪದ್ರವದ ನಿಮಿತ್ತವೂ ನರಳುತ್ತೇನೆ; ಅವರು ನನ್ನ ಮೇಲೆ ಅಪರಾಧವನ್ನು ಬೀಳಮಾಡಿ ಕೋಪದಿಂದ ನನ್ನನ್ನು ಹಗೆಮಾಡುತ್ತಾರೆ.
55:4b.PSA.055.004 ನನ್ನ ಹೃದಯವು ನನ್ನ ಅಂತ ರಂಗದಲ್ಲಿ ನೊಂದುಕೊಳ್ಳುತ್ತದೆ; ಮರಣದ ಬೆದರಿಕೆ ಗಳು ನನ್ನ ಮೇಲೆ ಬಿದ್ದವೆ.
55:5b.PSA.055.005 ಭಯವೂ ನಡುಗೂ ನನಗೆ ಬಂದವೆ; ಭೀತಿಯು ನನ್ನನ್ನು ಮುಚ್ಚಿಯದೆ.
55:6b.PSA.055.006 ನನಗೆ ಪಾರಿವಾಳದಂತೆ ರೆಕ್ಕೆಗಳಿರುತ್ತಿದ್ದರೆ ಹಾರಿ ಹೋಗಿ ವಿಶ್ರಾಂತಿಯನ್ನು ತೆಗೆದುಕೊಳ್ಳುತ್ತಿದ್ದೆನು ಎಂದು ಅಂದುಕೊಂಡೆನು.
55:7b.PSA.055.007 ಇಗೋ, ದೂರದ ಅರ ಣ್ಯಕ್ಕೆ ಅಲೆದಾಡುತ್ತಾ ಹೋಗಿ ತಂಗುವೆನು. ಸೆಲಾ.
55:8b.PSA.055.008 ಗಾಳಿಯ ತುಫಾನಿಗೂ ಬಿರುಗಾಳಿಗೂ ತಪ್ಪಿಸಿಕೊಳ್ಳಲು ತ್ವರೆಪಡುವೆನು.
55:9b.PSA.055.009 ಓ ಕರ್ತನೇ, (ಅವರನ್ನು) ನಾಶಮಾಡು. ಅವರ ನಾಲಿಗೆಗಳನ್ನು ಭೇದಿಸು; ಯಾಕಂದರೆ ಬಲಾತ್ಕಾರ ವನ್ನೂ ವಿವಾದವನ್ನೂ ಪಟ್ಟಣದಲ್ಲಿ ನಾನು ನೋಡಿ ದ್ದೇನೆ;
55:10b.PSA.055.010 ಹಗಲು ಇರುಳು ಅದರ ಗೋಡೆಗಳ ಮೇಲೆ ಅವರು ಸುತ್ತುತ್ತಾರೆ; ಕೇಡೂ ದುಃಖವೂ ಅವರ ಮಧ್ಯದಲ್ಲಿದೆ;
55:11b.PSA.055.011 ದುಷ್ಟತನವು ಅದರ ಮಧ್ಯ ದಲ್ಲಿದೆ; ಅದರ ಬೀದಿಗಳೊಳಗಿಂದ ಮೋಸವೂ ವಂಚನೆಯೂ ತೊಲಗುವದಿಲ್ಲ.
55:12b.PSA.055.012 ನನ್ನನ್ನು ನಿಂದಿಸಿದವನು ಶತ್ರುವಲ್ಲ; ಶತ್ರುವಾದರೆ ತಾಳಿಕೊಳ್ಳುತ್ತಿದ್ದೆನು; ನಿನಗೆ ವಿರೋಧವಾಗಿ ಹೆಚ್ಚಿಸಿ ಕೊಳ್ಳುವವನು ನನ್ನ ಹಗೆಯವನಲ್ಲ; ಹಗೆಯವನಾದರೆ ಅವನಿಗೆ ಅಡಗಿಕೊಳ್ಳುತ್ತಿದ್ದೆನು.
55:13b.PSA.055.013 ಆದರೆ ನೀನು ನನ್ನ ಜೊತಗಾರನೂ ನಡಿಸುವವನೂ ನನ್ನ ಪರಿಚಿತನೂ ಆಗಿದ್ದೀ.
55:14b.PSA.055.014 ನಾವು ಒಟ್ಟಾಗಿ ಇಂಪಾದ ಸಂಭಾಷಣೆ ಮಾಡಿದೆವು; ದೇವರ ಆಲಯಕ್ಕೆ ಗುಂಪಿನೊಂದಿಗೆ ನಡೆದುಹೋದೆವು.
55:15b.PSA.055.015 ಮರಣವು ಅವರನ್ನು ಹಿಡಿ ಯಲಿ; ತ್ವರಿತವಾಗಿ ನರಕಕ್ಕೆ ಅವರು ಇಳಿದುಹೋಗಲಿ; ಅವರ ವಾಸಸ್ಥಳದಲ್ಲಿಯೂ ಮಧ್ಯದಲ್ಲಿಯೂ ದುಷ್ಟತನ ಇದೆ.
55:16b.PSA.055.016 ನಾನಾದರೋ ದೇವರನ್ನು ಕರೆಯುವೆನು; ಕರ್ತ ನು ನನ್ನನ್ನು ರಕ್ಷಿಸುವನು.
55:17b.PSA.055.017 ಸಂಜೆಯಲ್ಲಿ ಮುಂಜಾನೆ ಯಲ್ಲಿ ಮಧ್ಯಾಹ್ನದಲ್ಲಿ ಪ್ರಾರ್ಥಿಸಿ ಕೂಗುವೆನು;ಆತನು ನನ್ನ ಸ್ವರವನ್ನು ಕೇಳುವನು.
55:18b.PSA.055.018 ನನಗೆ ವಿರೋಧ ವಾಗಿದ್ದ ಕಾಳಗದಿಂದ ಆತನು ನನ್ನ ಪ್ರಾಣವನ್ನು ಸಮಾಧಾನದಲ್ಲಿ ವಿಮೋಚಿಸಿದ್ದಾನೆ; ಹೇಗಂದರೆ ಅನೇಕರು ನನ್ನ ಸಂಗಡ ಇದ್ದರು.
55:19b.PSA.055.019 ಅನಾದಿಯಿಂದ ಇರುವ ದೇವರು ಲಕ್ಷ್ಯವಿಟ್ಟು ಅವರನ್ನು ಕುಗ್ಗಿಸುವನು. ಸೆಲಾ. ಅವರಲ್ಲಿ ಮಾರ್ಪಾಡುವಿಕೆಗಳು ಇಲ್ಲ; ಆದಕಾರಣ ದೇವರಿಗೆ ಅವರು ಭಯಪಡುವದಿಲ್ಲ.
55:20b.PSA.055.020 ಅವನು ತನ್ನ ಸಂಗಡ ಸಮಾಧಾನವುಳ್ಳವರಿಗೆ ವಿರೋಧವಾಗಿ ತನ್ನ ಕೈಗಳನ್ನು ಹಾಕಿದ್ದಾನೆ; ತನ್ನ ಒಡಂಬಡಿಕೆಯನ್ನು ಮುರಿದಿದ್ದಾನೆ.
55:21b.PSA.055.021 ಅವನ ಬಾಯಿ ಮಾತುಗಳು ಬೆಣ್ಣೆಗಿಂತ ನುಣುಪಾಗಿವೆ; ಅವನ ಹೃದ ಯವೋ ಕಲಹಮಯವೇ. ಅವನ ಮಾತುಗಳು ಎಣ್ಣೆ ಗಿಂತ ನಯವಾಗಿವೆ; ಆದರೆ ಅವು ಬಿಚ್ಚು ಕತ್ತಿಗಳಾಗಿವೆ.
55:22b.PSA.055.022 ನಿನ್ನ ಭಾರವನ್ನು ಕರ್ತನ ಮೇಲೆ ಹಾಕು; ಆತನು ನಿನಗೆ ಆಧಾರವಾಗಿರುವನು. ಆತನು ಎಂದೆಂದಿಗೂ ನೀತಿವಂತನನ್ನು ಕದಲಗೊಡಿಸನು.ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.
55:23b.PSA.055.023 ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.
56
56:1b.PSA.056.001 ಓ ದೇವರೇ, ನನ್ನನ್ನು ಕರುಣಿಸು; ಮನುಷ್ಯನು ನನ್ನನ್ನು ನುಂಗಬೇಕೆಂದಿದ್ದಾನೆ; ದಿನವೆಲ್ಲಾ ಯುದ್ಧಮಾಡುತ್ತಾ ನನ್ನನ್ನು ಬಾಧಿಸುತ್ತಾನೆ.
56:2b.PSA.056.002 ಓ ಅತ್ಯುನ್ನತನೇ, ನನ್ನ ವಿರೋಧಿಗಳು ದಿನವೆಲ್ಲಾ ನನ್ನನ್ನು ನುಂಗಬೇಕೆಂದಿದ್ದಾರೆ; ನನಗೆ ವಿರೋಧವಾಗಿ ಗರ್ವದಿಂದ ಯುದ್ಧಮಾಡುವವರು ಅನೇಕರಾಗಿದ್ದಾರೆ.
56:3b.PSA.056.003 ನನಗೆ ಹೆದರಿಕೆ ಉಂಟಾದಾಗ ನಿನ್ನಲ್ಲಿ ಭರವಸವಿ ಡುವೆನು.
56:4b.PSA.056.004 ದೇವರಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು; ದೇವರಲ್ಲಿ ನಾನು ಭರವಸವಿಟ್ಟಿದ್ದೇನೆ; ನಾನು ಭಯಪಡೆನು, ಮನುಷ್ಯನು ನನಗೆ ಏನು ಮಾಡಬಲ್ಲನು?
56:5b.PSA.056.005 ಪ್ರತಿದಿನ ಅವರು ನನ್ನ ಮಾತುಗಳನ್ನು ಅಪಾರ್ಥ ಮಾಡುತ್ತಾರೆ. ನನಗೆ ವಿರೋಧವಾಗಿರುವ ಅವರ ಆಲೋಚನೆಗಳೆಲ್ಲಾ ನನ್ನ ಕೇಡಿಗಾಗಿವೆ.
56:6b.PSA.056.006 ಅವರು ಕೂಡಿಕೊಂಡು ಹೊಂಚುಹಾಕುತ್ತಾರೆ; ನನ್ನ ಪ್ರಾಣಕ್ಕೆ ಕಾಯುವವರಾಗಿ ನನ್ನ ಹೆಜ್ಜೆಗಳನ್ನು ಗುರುತಿಸುತ್ತಾರೆ.
56:7b.PSA.056.007 ಅಪರಾಧದಿಂದ ಅವರು ತಪ್ಪಿಸಿಕೊಂಡಾರೋ? ಓ ದೇವರೇ, ಕೋಪದಿಂದ ಜನರನ್ನು ಕೆಡವಿಹಾಕು.
56:8b.PSA.056.008 ನನ್ನ ಅಲೆದಾಡುವಿಕೆಗಳನ್ನು ನೀನು ಲೆಕ್ಕಿಸಿದ್ದೀ; ನನ್ನ ಕಣ್ಣೀರನ್ನು ನಿನ್ನ ಬುದ್ದಲಿಯಲ್ಲಿ ಹಾಕು; ಅದು ನಿನ್ನ ಪುಸ್ತಕದಲ್ಲಿ ಇಲ್ಲವೋ?
56:9b.PSA.056.009 ನಾನು ನಿನ್ನನ್ನು ಕೂಗಿ ಕೊಂಡಾಗ ನನ್ನ ಶತ್ರುಗಳು ಹಿಂದಿರುಗುವರು; ದೇವರು ನನಗಿದ್ದಾನೆ ಎಂಬದನ್ನು ಬಲ್ಲೆನು.
56:10b.PSA.056.010 ದೇವ ರಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು; ಕರ್ತ ನಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು.
56:11b.PSA.056.011 ದೇವರಲ್ಲಿ ನಾನು ಭರವಸವಿಟ್ಟಿದ್ದೇನೆ; ನಾನು ಭಯ ಪಡೆನು; ಮನುಷ್ಯನು ನನಗೆ ಏನು ಮಾಡಬಲ್ಲನು?
56:12b.PSA.056.012 ಓ ದೇವರೇ, ನಿನ್ನ ಪ್ರಮಾಣಗಳು ನನ್ನ ಮೇಲೆ ಇವೆ; ನಾನು ಸ್ತೋತ್ರಗಳನ್ನು ನಿನಗೆ ಸಲ್ಲಿಸುವೆನು.ನನ್ನ ಪ್ರಾಣವನ್ನು ಮರಣದಿಂದ ಬಿಡಿಸಿದ್ದೀ, ಹಾಗೆ ನಾನು ಜೀವಿತರ ಬೆಳಕಿನಲ್ಲಿ ದೇವರ ಮುಂದೆ ನಡೆಯುವ ನನ್ನ ಪಾದಗಳನ್ನು ಬೀಳದಂತೆ ನೀನು ತಪ್ಪಿಸುವದಿಲ್ಲವೋ?
56:13b.PSA.056.013 ನನ್ನ ಪ್ರಾಣವನ್ನು ಮರಣದಿಂದ ಬಿಡಿಸಿದ್ದೀ, ಹಾಗೆ ನಾನು ಜೀವಿತರ ಬೆಳಕಿನಲ್ಲಿ ದೇವರ ಮುಂದೆ ನಡೆಯುವ ನನ್ನ ಪಾದಗಳನ್ನು ಬೀಳದಂತೆ ನೀನು ತಪ್ಪಿಸುವದಿಲ್ಲವೋ?
57
57:1b.PSA.057.001 ನನ್ನ ಮೇಲೆ ಕರುಣೆಯಿಡು, ಓ ದೇವರೇ, ನನ್ನನ್ನು ಕರುಣಿಸು; ನನ್ನ ಪ್ರಾಣವು ನಿನ್ನನ್ನು ಆಶ್ರಯಿಸಿಕೊಳ್ಳುತ್ತದೆ. ಆಪತ್ತುಗಳು ದಾಟುವ ವರೆಗೂ ನಿನ್ನ ರೆಕ್ಕೆಗಳ ನೆರಳನ್ನೇ ನಾನು ಆಶ್ರಯಿಸಿಕೊಳ್ಳುತ್ತೇನೆ.
57:2b.PSA.057.002 ಮಹೋನ್ನತನಾದ ದೇವರಿಗೆ, ನನಗೋಸ್ಕರ ಕಾರ್ಯ ಗಳನ್ನು ಸಫಲಮಾಡುವ ದೇವರನ್ನೇ, ಕೂಗುತ್ತೇನೆ.
57:3b.PSA.057.003 ಆತನು ಪರಲೋಕದಿಂದ ಕಳುಹಿಸಿ ನುಂಗಲಿರುವ ವನ ನಿಂದೆಯಿಂದ ನನ್ನನ್ನು ರಕ್ಷಿಸುವನು. ಸೆಲಾ. ದೇವರು ಕೃಪೆಯನ್ನೂ ತನ್ನ ಸತ್ಯವನ್ನೂ ಕಳುಹಿಸುವನು.
57:4b.PSA.057.004 ನನ್ನ ಪ್ರಾಣವು ಸಿಂಹಗಳ ಮಧ್ಯದಲ್ಲಿದೆ; ಬೆಂಕಿಯಂತೆ ಉರಿಯುವ ಮನುಷ್ಯರ ಮಧ್ಯದಲ್ಲಿ ಬಿದ್ದಿದ್ದೇನೆ. ಅವರ ಹಲ್ಲುಗಳು ಭಲ್ಲೆಬಾಣಗಳೂ; ಅವರ ನಾಲಿಗೆ ಹದವಾದ ಕತ್ತಿ.
57:5b.PSA.057.005 ಓ ದೇವರೇ, ಆಕಾಶಗಳಿಗಿಂತ ನೀನು ಉನ್ನತನಾಗು; ಭೂಮಿಯ ಮೇಲೆಲ್ಲಾ ನಿನ್ನ ಮಹಿಮೆಯು ಇರಲಿ.
57:6b.PSA.057.006 ಅವರು ನನ್ನ ಹೆಜ್ಜೆಗಳಿಗೆ ಬಲೆಯೊಡ್ಡಿದ್ದಾರೆ. ನನ್ನ ಪ್ರಾಣವು ಕುಗ್ಗಿಹೋಗಿದೆ; ನನ್ನ ಮುಂದೆ ಕುಣಿಯನ್ನು ಅಗೆದು ಅದರ ನಡುವೆ ತಾವೇ ಬಿದ್ದಿದ್ದಾರೆ. ಸೆಲಾ.
57:7b.PSA.057.007 ಓ ದೇವರೇ, ನನ್ನ ಹೃದಯವು ಸ್ಥಿರವಾಗಿದೆ; ನನ್ನ ಹೃದಯವು ಸ್ಥಿರವಾಗಿದೆ; ನಾನು ಹಾಡುವೆನು, ಕೀರ್ತಿಸುವೆನು.
57:8b.PSA.057.008 ಎಚ್ಚರವಾಗು, ನನ್ನ ಘನವೇ; ಎಚ್ಚರ ವಾಗು, ವೀಣೆಯೇ, ಕಿನ್ನರಿಯೇ, ನಾನು ಉದಯದಲ್ಲಿ ಎಚ್ಚರಗೊಳ್ಳುವೆನು.
57:9b.PSA.057.009 ಓ ನನ್ನ ಕರ್ತನೇ, ಜನರಲ್ಲಿ ನಾನು ನಿನ್ನನ್ನು ಕೊಂಡಾಡುವೆನು; ಜನಗಳಲ್ಲಿ ನಿನ್ನನ್ನು ಕೀರ್ತಿಸುವೆನು.
57:10b.PSA.057.010 ಆಕಾಶದ ವರೆಗೆ ನಿನ್ನ ಕರುಣೆಯೂ ಮೇಘಗಳ ವರೆಗೆ ನಿನ್ನ ಸತ್ಯವೂ ದೊಡ್ಡದಾದವು ಗಳಾಗಿವೆ.ಓ ದೇವರೇ, ಆಕಾಶಕ್ಕಿಂತ ಉನ್ನತನಾಗು; ಭೂಮಿಯ ಮೇಲೆಲ್ಲಾ ನಿನ್ನ ಘನವು ಇರಲಿ.
57:11b.PSA.057.011 ಓ ದೇವರೇ, ಆಕಾಶಕ್ಕಿಂತ ಉನ್ನತನಾಗು; ಭೂಮಿಯ ಮೇಲೆಲ್ಲಾ ನಿನ್ನ ಘನವು ಇರಲಿ.
58
58:1b.PSA.058.001 ಓ ಸಭೆಯೇ, ನೀವು ನಿಜವಾಗಿ ನೀತಿಯನ್ನು ನುಡಿಯುವಿರೋ? ಓ ಮನುಷ್ಯರ ಮಕ್ಕಳೇ, ನೀವು ಯಥಾರ್ಥವಾಗಿ ನ್ಯಾಯತೀರಿಸು ವಿರೋ?
58:2b.PSA.058.002 ಹೌದು, ನಿಮ್ಮ ಹೃದಯದಲ್ಲಿ ದುಷ್ಟತ್ವ ವನ್ನು ಮಾಡುತ್ತೀರಲ್ಲಾ, ಲೋಕದಲ್ಲಿ ನಿಮ್ಮ ಕೈಗಳ ಬಲಾತ್ಕಾರವನ್ನು ತೂಗುತ್ತೀರಲ್ಲಾ.
58:3b.PSA.058.003 ದುಷ್ಟರು ಗರ್ಭದಿಂದಲೇ ದೂರವಾಗುತ್ತಾರೆ; ಹುಟ್ಟಿದಾಗಲೇ ಸುಳ್ಳಾಡುವವರಾಗಿ ತಪ್ಪಿಹೋಗುತ್ತಾರೆ.
58:4b.PSA.058.004 ಹಾವಿನ ವಿಷದ ಹಾಗೆ ಅವರ ವಿಷವುಂಟು; ಅವರು ಕಿವಿಯನ್ನು ಮುಚ್ಚಿಕೊಳ್ಳುವ ಕಿವುಡ ಸರ್ಪದ ಹಾಗಿ ದ್ದಾರೆ.
58:5b.PSA.058.005 ಜಾಣತನದಿಂದ ಮಂತ್ರಿಸುವ ಹಾವಾಡಿಗರ ನಾಗಸ್ವರಕ್ಕೂ ಮರುಳಾಗದೆ ಕಿವಿಗೊಡದ ಕಳ್ಳಹಾವಿ ನಂತೆ ಇರುತ್ತಾರೆ.
58:6b.PSA.058.006 ಓ ದೇವರೇ, ಅವರ ಬಾಯಿ ಯಲ್ಲಿರುವ ಹಲ್ಲುಗಳನ್ನು ಮುರಿದುಬಿಡು; ಓ ಕರ್ತನೇ, ಪ್ರಾಯದ ಸಿಂಹಗಳ ಕೋರೆ ಹಲ್ಲುಗಳನ್ನು ಒಡೆದು ಬಿಡು;
58:7b.PSA.058.007 ಬಿಡದೆ ಹರಿಯುವ ನೀರಿನಂತೆ ಅವರು ಕರಗಿ ಹೋಗಲಿ; ಅವನು ತನ್ನ ಬಾಣಗಳನ್ನು ಗುರಿಯಿಟ್ಟಾಗ ಅವರು ಕಡಿಯಲ್ಪಟ್ಟ ತುಂಡುಗಳಂತಿರಲಿ.
58:8b.PSA.058.008 ಬಸವನ ಹುಳವು ಕರಗಿಹೋಗುವಂತೆ ಅವರಲ್ಲಿ ಪ್ರತಿಯೊಬ್ಬನು ಗತಿಸಿಹೋಗಲಿ; ದಿನ ತುಂಬದೆ ಹುಟ್ಟಿದ ಶಿಶುವಿನಂತೆ ಅವರು ಸೂರ್ಯನನ್ನು ದೃಷ್ಟಿಸರು.
58:9b.PSA.058.009 ನಿಮ್ಮ ಗಡಿಗೆಗಳಿಗೆ ಮುಳ್ಳಿನಕಾವು ತಾಗುವದಕ್ಕಿಂತ ಮುಂಚೆ ಅದು ಹಸಿ ಇರುವಾಗಲೇ ದೇವರು ಕೋಪದಿಂದ ಬಿರುಗಾಳಿಯಿಂ ದಲೋ ಎಂಬಂತೆ ಅವರನ್ನು ಹಾರಿಸಿಬಿಡುವನು.
58:10b.PSA.058.010 ಮುಯ್ಯಿಗೆಮುಯ್ಯಿ ಆಗುವದನ್ನು ನೀತಿವಂತನು ದೃಷ್ಟಿಸುವಾಗ ಅವನು ಸಂತೋಷ ಪಡುವನು; ಅವನು ತನ್ನ ಪಾದಗಳನ್ನು ದುಷ್ಟರ ರಕ್ತ ದಲ್ಲಿ ತೊಳೆಯುವನು.ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು.
58:11b.PSA.058.011 ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು.
59
59:1b.PSA.059.001 ಓ ನನ್ನ ದೇವರೇ, ನನ್ನ ಶತ್ರುಗಳಿಂದ ನನ್ನನ್ನು ಬಿಡಿಸು; ನನಗೆ ವಿರೋಧವಾಗಿ ಎದ್ದವರಿಂದ ನನ್ನನ್ನು ರಕ್ಷಿಸು.
59:2b.PSA.059.002 ಅಪರಾಧ ಮಾಡುವವರಿಂದ ನನ್ನನ್ನು ಬಿಡಿಸು; ಕೊಲೆಪಾತಕರಿಂದ ನನ್ನನ್ನು ರಕ್ಷಿಸು.
59:3b.PSA.059.003 ಓ ಕರ್ತನೇ, ನನ್ನ ಅಪರಾಧಕ್ಕಾಗಿ ಇಲ್ಲವೆ ನನ್ನ ಪಾಪಕ್ಕಾಗಿ ಅಲ್ಲ; ಆದರೂ ಇಗೋ, ಅವರು ನನ್ನ ಪ್ರಾಣಕ್ಕೆ ಹೊಂಚುಹಾಕುತ್ತಾರೆ; ಪರಾಕ್ರಮಶಾಲಿಗಳು ನನಗೆ ವಿರೋಧವಾಗಿ ಕೂಡಿ ಕೊಳ್ಳುತ್ತಾರೆ.
59:4b.PSA.059.004 ನನ್ನಲ್ಲಿ ತಪ್ಪು ಇಲ್ಲದಿದ್ದರೂ ಅವರು ಓಡಾಡಿ ಸಿದ್ಧರಾಗುತ್ತಾರೆ; ನನಗೆ ಸಹಾಯ ಮಾಡುವದಕ್ಕೆ ಎಚ್ಚತ್ತು ನೋಡು.
59:5b.PSA.059.005 ಸೈನ್ಯಗಳ ದೇವ ರಾದ ಓ ಕರ್ತನೇ, ಇಸ್ರಾಯೇಲಿನ ದೇವರೇ, ನೀನು ಎಲ್ಲಾ ಜನಾಂಗಗಳನ್ನು ದರ್ಶಿಸುವದಕ್ಕೆ ಎಚ್ಚರವಾಗು; ದುಷ್ಟರಾದ ಅಪರಾಧಿಗಳಲ್ಲಿ ಯಾರಿಗಾದರೂ ಕರುಣೆ ತೋರಿಸಬೇಡ. ಸೆಲಾ.
59:6b.PSA.059.006 ಅವರು ಸಂಜೆಗೆ ಹಿಂತಿರುಗುವರು; ನಾಯಿಯ ಹಾಗೆ ಬೊಗಳುವರು; ಪಟ್ಟಣವನ್ನು ಸುತ್ತುವರು.
59:7b.PSA.059.007 ಇಗೋ, ತಮ್ಮ ಬಾಯಿಯಿಂದ ಕಕ್ಕುತ್ತಾರೆ; ಅವರ ತುಟಿಗಳಲ್ಲಿ ಕತ್ತಿಗಳು ಅವೆ; ಅವರು--ಕೇಳುವವನಾರು ಎಂದು ಅನ್ನುತ್ತಾರೆ.
59:8b.PSA.059.008 ಆದರೆ ಓ ಕರ್ತನೇ, ನೀನು ಅವರನ್ನು ನೋಡಿ ನಗುವಿ, ನೀನು ಅನ್ಯಜನಾಂಗ ಗಳನ್ನೆಲ್ಲಾ ಗೇಲಿಮಾಡುವಿ.
59:9b.PSA.059.009 ನನ್ನ ಬಲಕ್ಕಾಗಿ ನಾನು ನಿನ್ನನ್ನು ಕಾದುಕೊಂಡಿರುವೆನು; ದೇವರು ನನ್ನ ದುರ್ಗವಾಗಿದ್ದಾನೆ.
59:10b.PSA.059.010 ಕರುಣೆಯುಳ್ಳ ನನ್ನ ದೇವರು ನನಗೆ ಪ್ರಸನ್ನನಾಗುವನು; ದೇವರು ನನ್ನ ಇಷ್ಟದಂತೆ ನನ್ನ ವಿರೋಧಿಗಳಿಗೆ ಆಗುವದನ್ನು ನೋಡುವಂತೆ ಮಾಡುವನು.
59:11b.PSA.059.011 ನನ್ನ ಜನರು ಮರೆತುಬಿಡದ ಹಾಗೆ ಅವರನ್ನು ಕೊಲ್ಲಬೇಡ; ನಿನ್ನ ಪರಾಕ್ರಮದಿಂದ ಅವರನ್ನು ಚದರಿಸಿ, ನಮ್ಮ ಗುರಾಣಿಯಾದ ಓ ಕರ್ತನೇ, ಅವರನ್ನು ಕೆಡವಿಹಾಕು.
59:12b.PSA.059.012 ಅವರ ಬಾಯಿಂದ ಬರುವ ಪಾಪಕ್ಕೂ ಅವರ ತುಟಿಗಳ ಮಾತಿಗೂ ಅವರು ನುಡಿಯುವ ಶಾಪಕ್ಕೋಸ್ಕರವೂ ಸುಳ್ಳುಗಳಿಗೋಸ್ಕರವೂ ಅವರ ಅಹಂಕಾರದಲ್ಲಿ ಸಿಕ್ಕಿಬೀಳಲಿ.
59:13b.PSA.059.013 ಕೋಪದಿಂದ ಅವ ರನ್ನು ದಹಿಸಿಬಿಡು, ಅವರು ಇಲ್ಲದಂತೆ ಸಂಹರಿಸು; ಆಗ ದೇವರು ಯಾಕೋಬನಲ್ಲಿ ಭೂಮಿಯ ಕೊನೆ ಗಳವರೆಗೆ ಆಳುವಾತನಾಗಿದ್ದಾನೆಂದು ತಿಳುಕೊಳ್ಳು ವರು. ಸೆಲಾ.
59:14b.PSA.059.014 ಸಂಜೆಗೆ ಅವರು ಹಿಂತಿರುಗುವರು; ನಾಯಿಯ ಹಾಗೆ ಬೊಗಳುವರು; ಪಟ್ಟಣವನ್ನು ಸುತ್ತು ವರು.
59:15b.PSA.059.015 ಅವರು ಊಟಕ್ಕಾಗಿ ಅಲೆದಾಡಲಿ; ತೃಪ್ತಿ ಯಾಗದೆ ಗುಣಗುಟ್ಟಲಿ.
59:16b.PSA.059.016 ಆದರೆ ನಾನು ನಿನ್ನ ಬಲದ ವಿಷಯವಾಗಿ ಹಾಡುವೆನು; ಹೌದು, ಹೊತ್ತಾರೆ ನಿನ್ನ ಕೃಪೆಗಾಗಿ ಉತ್ಸಾಹಪಡುವೆನು; ನೀನು ನನಗೆ ದುರ್ಗ ವಾಗಿಯೂ ನನ್ನ ಇಕ್ಕಟ್ಟಿನ ದಿವಸದಲ್ಲಿ ಆಶ್ರಯ ವಾಗಿಯೂ ಇದ್ದೀ.ಓ ನನ್ನ ಬಲವೇ, ನಿನ್ನನ್ನು ಕೀರ್ತಿಸುವೆನು; ದೇವರು ನನ್ನ ದುರ್ಗವೂ ಕರುಣೆ ಯುಳ್ಳ ನನ್ನ ದೇವರೂ ಆಗಿದ್ದಾನೆ.
59:17b.PSA.059.017 ಓ ನನ್ನ ಬಲವೇ, ನಿನ್ನನ್ನು ಕೀರ್ತಿಸುವೆನು; ದೇವರು ನನ್ನ ದುರ್ಗವೂ ಕರುಣೆ ಯುಳ್ಳ ನನ್ನ ದೇವರೂ ಆಗಿದ್ದಾನೆ.
60
60:1b.PSA.060.001 ಓ ದೇವರೇ, ಕೋಪಿಸಿಕೊಂಡು ನಮ್ಮನ್ನು ತಳ್ಳಿ ಚದರಿಸಿಬಿಟ್ಟಿದ್ದೀ; ಮತ್ತೆ ನಮ್ಮ ಕಡೆಗೆ ತಿರುಗಿಕೋ.
60:2b.PSA.060.002 ಭೂಮಿಯನ್ನು ನಡುಗಿಸಿ ಸೀಳಿಬಿಟ್ಟಿದ್ದೀ; ಅದರ ಬಿರುಕುಗಳನ್ನು ಸರಿಮಾಡು; ಅದು ಕದಲು ತ್ತದೆ.
60:3b.PSA.060.003 ನಿನ್ನ ಜನರಿಗೆ ಕಠಿಣವಾದವುಗಳನ್ನು ನೀನು ತೋರಿಸಿದ್ದೀ; ವಿಸ್ಮಯದ ದ್ರಾಕ್ಷಾರಸವನ್ನು ನಮಗೆ ಕುಡಿಸಿದ್ದೀ.
60:4b.PSA.060.004 ಸತ್ಯದ ನಿಮಿತ್ತ ಧ್ವಜವು ಎತ್ತಲ್ಪಡುವಂತೆ ನಿನಗೆ ಭಯಪಡುವವರಿಗೆ ನೀನು ಅದನ್ನು ಕೊಟ್ಟಿದ್ದೀ. ಸೆಲಾ.
60:5b.PSA.060.005 ನಿನ್ನ ಪ್ರಿಯರು ಬಿಡುಗಡೆ ಯಾಗುವಂತೆ ನನ್ನ ಪ್ರಾರ್ಥನೆಯನ್ನು ಕೇಳಿ ನಿನ್ನ ಬಲಗೈಯಿಂದ ರಕ್ಷಿಸು.
60:6b.PSA.060.006 ದೇವರು ತನ್ನ ಪರಿಶುದ್ಧತ್ವದಿಂದ ನುಡಿದಿದ್ದಾನೆ; ನಾನು ಉತ್ಸಾಹಪಡುವೆನು; ಶೆಕೆಮನ್ನು ವಿಭಾಗಿ ಸುವೆನು; ಸುಖೋತಿನ ತಗ್ಗನ್ನು ಅಳೆಯುವೆನು.
60:7b.PSA.060.007 ಗಿಲ್ಯಾದ್ ಮನಸ್ಸೆ ನನ್ನದು; ಎಫ್ರಾಯಾಮ್ ನನ್ನ ತಲೆಯ ಬಲವಾಗಿದೆ; ಯೆಹೂದನು ನನಗೆ ನ್ಯಾಯ ಕೊಡುವವನು;
60:8b.PSA.060.008 ಮೋವಾಬ್ ನನ್ನನ್ನು ತೊಳೆಯುವ ಪಾತ್ರೆಯು; ಎದೋಮಿನ ಮೇಲೆ ನನ್ನ ಕೆರವನ್ನು ಎಸೆಯುವೆನು; ಫಿಲಿಷ್ಟಿಯವೇ, ನನ್ನ ನಿಮಿತ್ತ ಜಯಧ್ವನಿ ಮಾಡು.
60:9b.PSA.060.009 ಬಲವುಳ್ಳ ಪಟ್ಟಣಕ್ಕೆ ನನ್ನನ್ನು ಕರತರುವವನಾರು? ಎದೋಮಿನೊಳಗೆ ನನ್ನನ್ನು ನಡಿಸುವವನಾರು?
60:10b.PSA.060.010 ಓ ದೇವರೇ, ನಮ್ಮನ್ನು ತಳ್ಳಿಬಿಟ್ಟು ನಮ್ಮ ಸೈನ್ಯಗಳ ಸಂಗಡ ಹೊರಟು ಹೋಗದೆ ಇದ್ದ ದೇವರು ನೀನ ಲ್ಲವೋ?
60:11b.PSA.060.011 ಇಕ್ಕಟ್ಟಿನಲ್ಲಿ ನಮಗೆ ಸಹಾಯ ಮಾಡು; ಮನುಷ್ಯನ ಸಹಾಯವು ವ್ಯರ್ಥವಾಗಿದೆ.ದೇವ ರಿಂದ ಪರಾಕ್ರಮ ಕಾರ್ಯಗಳನ್ನು ಮಾಡುವೆವು; ಆತನೇ ನಮ್ಮ ವೈರಿಗಳನ್ನು ತುಳಿದುಬಿಡುವನು.
60:12b.PSA.060.012 ದೇವ ರಿಂದ ಪರಾಕ್ರಮ ಕಾರ್ಯಗಳನ್ನು ಮಾಡುವೆವು; ಆತನೇ ನಮ್ಮ ವೈರಿಗಳನ್ನು ತುಳಿದುಬಿಡುವನು.
61
61:1b.PSA.061.001 ಓ ದೇವರೇ, ನನ್ನ ಕೂಗನ್ನು ಕೇಳು; ನನ್ನ ಪ್ರಾರ್ಥನೆಯನ್ನು ಆಲೈಸು.
61:2b.PSA.061.002 ನನ್ನ ಹೃದಯವು ಕುಂದಿಹೋಗಿರಲಾಗಿ, ಭೂಮಿಯ ಕಡೇ ಭಾಗದಿಂದ ನಿನ್ನನ್ನು ಕೂಗುವೆನು; ನನಗಿಂತ ಎತ್ತರ ವಾದ ಬಂಡೆಗೆ ನನ್ನನ್ನು ನಡಿಸು.
61:3b.PSA.061.003 ನೀನು ನನಗೆ ಆಶ್ರಯವೂ ಶತ್ರುವಿನಿಂದ ತಪ್ಪಿಸುವ ಬಲವಾದ ಬುರುಜೂ ಆಗಿದ್ದೀ;
61:4b.PSA.061.004 ನಿನ್ನ ಗುಡಾರದಲ್ಲಿ ನಾನು ಎಂದೆಂದಿಗೂ ವಾಸಿಸುವೆನು; ನಿನ್ನ ರೆಕ್ಕೆಗಳ ಮರೆಯಲ್ಲಿ ಭರವಸವುಳ್ಳವನಾಗಿರುವೆನು. ಸೆಲಾ.
61:5b.PSA.061.005 ಓ ದೇವರೇ, ನೀನು ನನ್ನ ಹರಕೆಗಳನ್ನು ಕೇಳಿದ್ದೀ; ನಿನ್ನ ಹೆಸರಿಗೆ ಭಯಪಡುವವರಿಗೆ ಸ್ವಾಸ್ಥ್ಯವನ್ನು ಕೊಟ್ಟಂತೆ ನನಗೂ ಕೊಟ್ಟಿದ್ದೀ.
61:6b.PSA.061.006 ಅರಸನ ಆಯುಷ್ಯ ವನ್ನು ಹೆಚ್ಚಿಸುವಿ; ಅವನ ವರುಷಗಳು ಅನೇಕ ತಲ ತಲಾಂತರಗಳ ಹಾಗೆ ಇರುವವು.
61:7b.PSA.061.007 ಅವನು ಎಂದಿಗೂ ದೇವರ ಮುಂದೆ ವಾಸಿಸುವನು; ಅವನನ್ನು ಕಾಯು ವದಕ್ಕೆ ಕರುಣೆಯನ್ನೂ ಸತ್ಯವನ್ನೂ ಸಿದ್ಧಮಾಡು.ಹಾಗಾದರೆ ನನ್ನ ಹರಕೆಗಳನ್ನು ದಿನ ದಿನಕ್ಕೆ ಸಲ್ಲಿ ಸುವ ಹಾಗೆ ನಿನ್ನ ಹೆಸರನ್ನು ಎಂದೆಂದಿಗೂ ನಾನು ಕೀರ್ತಿಸುವೆನು.
61:8b.PSA.061.008 ಹಾಗಾದರೆ ನನ್ನ ಹರಕೆಗಳನ್ನು ದಿನ ದಿನಕ್ಕೆ ಸಲ್ಲಿ ಸುವ ಹಾಗೆ ನಿನ್ನ ಹೆಸರನ್ನು ಎಂದೆಂದಿಗೂ ನಾನು ಕೀರ್ತಿಸುವೆನು.
62
62:1b.PSA.062.001 ನಿಜವಾಗಿ ನನ್ನ ಪ್ರಾಣವು ದೇವರಿಗಾಗಿ ಕಾಯುತ್ತದೆ; ನನ್ನ ರಕ್ಷಣೆಯು ಆತ ನಿಂದಲೇ.
62:2b.PSA.062.002 ಆತನೇ ನನ್ನ ಬಂಡೆಯೂ ರಕ್ಷಣೆಯೂ ದುರ್ಗವೂ ಆಗಿದ್ದಾನೆ; ನಾನು ಕದಲುವದೇ ಇಲ್ಲ.
62:3b.PSA.062.003 ಎಷ್ಟರವರೆಗೆ ಒಬ್ಬ ಮನುಷ್ಯನಿಗೆ ವಿರೋಧವಾಗಿ ಕೇಡನ್ನು ಕಲ್ಪಿಸುತ್ತೀರಿ? ನೀವೆಲ್ಲರೂ ಕೊಲ್ಲಲ್ಪಡುವಿರಿ; ನೀವು ಕುಸಿದುಬೀಳುವ ಗೋಡೆಯಂತೆಯೂ ಅಲ್ಲಾ ಡುವ ಬೇಲಿಯಂತೆಯೂ ಇರುವಿರಿ.
62:4b.PSA.062.004 ಅವರು ಅವ ನನ್ನು ಉನ್ನತಸ್ಥಾನದಿಂದ ದೊಬ್ಬುವದನ್ನೇ ಆಲೋಚಿ ಸುತ್ತಾರೆ; ಅವರು ಸುಳ್ಳುಗಳಲ್ಲಿ ಇಷ್ಟ ಪಡುತ್ತಾರೆ. ಅವರು ತಮ್ಮ ಬಾಯಿಂದ ಆಶೀರ್ವದಿಸಿ ಅಂತರಂಗ ದಲ್ಲಿ ಶಪಿಸುತ್ತಾರೆ. ಸೆಲಾ.
62:5b.PSA.062.005 ನನ್ನ ಪ್ರಾಣವೇ, ದೇವರಿಗಾಗಿ ಮಾತ್ರ ಕಾದಿರು; ನನ್ನ ನಿರೀಕ್ಷೆಯು ಆತನಿಂದಲೇ.
62:6b.PSA.062.006 ಆತನೇ ನನ್ನ ಬಂಡೆಯೂ ರಕ್ಷಣೆಯೂ ದುರ್ಗವೂ ಆಗಿದ್ದಾನೆ. ನಾನು ಕದಲೆನು.
62:7b.PSA.062.007 ದೇವರಲ್ಲಿಯೇ ನನ್ನ ರಕ್ಷಣೆಯೂ ಘನವೂ ಇದೆ; ನನ್ನ ಬಲದ ಬಂಡೆಯೂ ನನ್ನ ಆಶ್ರಯವೂ ದೇವರಲ್ಲಿಯೇ.
62:8b.PSA.062.008 ಎಲ್ಲಾ ಕಾಲದಲ್ಲಿ ಆತನಲ್ಲಿ ಭರವಸ ವಿಡಿರಿ, ಜನರೇ; ನಿಮ್ಮ ಹೃದಯವನ್ನು ಆತನ ಮುಂದೆ ಹೊಯ್ಯಿರಿ; ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
62:9b.PSA.062.009 ನಿಶ್ಚಯವಾಗಿ ಅಲ್ಪರು ವ್ಯರ್ಥರೇ, ಘನವಂತರು ಸುಳ್ಳೇ; ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿದರೆ ಧೂಳಿ ಗಿಂತಲೂ ಲಘುವಾಗಿದ್ದಾರೆ.
62:10b.PSA.062.010 ಅನ್ಯಾಯದಲ್ಲಿ ಭರ ವಸವಿಡಬೇಡಿರಿ; ಸುಲಿಗೆಯಲ್ಲಿ ವ್ಯರ್ಥರಾಗಬೇಡಿರಿ; ಆಸ್ತಿಯು ಹೆಚ್ಚಿದರೆ ಅದರ ಮೇಲೆ ಮನಸ್ಸಿಡಬೇಡಿರಿ.
62:11b.PSA.062.011 ಅಧಿಕಾರವು ದೇವರದೆಂದು ಆತನು ಒಂದು ಸಾರಿ ಮಾತನಾಡಿದ್ದನ್ನು; ನಾನು ಎರಡು ಸಾರಿ ಕೇಳಿದ್ದೇನೆ; ಶಕ್ತಿಯು ದೇವರಿಗೆ ಸಂಬಂಧಪಟ್ಟದ್ದು.ಓ ಕರ್ತನೇ, ನಿನ್ನಲ್ಲಿ ಕರುಣೆಯುಂಟು; ನೀನು ಪ್ರತಿ ಮನುಷ್ಯನಿಗೆ ಅವನ ಕೆಲಸದ ಪ್ರಕಾರ ಪ್ರತಿಫಲ ಕೊಡುತ್ತೀ.
62:12b.PSA.062.012 ಓ ಕರ್ತನೇ, ನಿನ್ನಲ್ಲಿ ಕರುಣೆಯುಂಟು; ನೀನು ಪ್ರತಿ ಮನುಷ್ಯನಿಗೆ ಅವನ ಕೆಲಸದ ಪ್ರಕಾರ ಪ್ರತಿಫಲ ಕೊಡುತ್ತೀ.
63
63:1b.PSA.063.001 ಓ ದೇವರೇ, ನೀನೇ ನನ್ನ ದೇವರು ಹೊತ್ತಾರೆ ನಿನ್ನನ್ನು ಹುಡುಕುತ್ತೇನೆ; ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿ ಗಾಗಿಯೋ ಎಂಬಂತೆ ನನ್ನ ಆತ್ಮವು ನಿನಗಾಗಿ ಆತುರ ಗೊಳ್ಳುತ್ತದೆ; ಶರೀರವು ಕಂದಿಹೋಗುತ್ತದೆ.
63:2b.PSA.063.002 ಹೀಗೆ ನಿನ್ನ ಬಲವನ್ನೂ ಘನವನ್ನೂ ನೋಡಿ ಪರಿಶುದ್ಧ ಸ್ಥಳ ದಲ್ಲಿ ನಾನು ನಿನ್ನನ್ನು ನೋಡಿದ್ದೇನೆ.
63:3b.PSA.063.003 ನಿನ್ನ ಪ್ರೀತಿ ಕರುಣೆಯು ಜೀವಕ್ಕಿಂತ ಶ್ರೇಷ್ಠ ವಾದದ್ದು; ನನ್ನ ತುಟಿಗಳು ನಿನ್ನನ್ನು ಹೊಗಳುವವು.
63:4b.PSA.063.004 ನನ್ನ ಜೀವಮಾನದಲ್ಲೆಲ್ಲಾ ಹೀಗೆಯೇ ನಿನ್ನನ್ನು ಹಾಡಿಹರಸುತ್ತಾ ನಿನ್ನ ಹೆಸರೆತ್ತಿ ಕೈಮುಗಿಯುವೆನು.
63:5b.PSA.063.005 ನಾನು ರಾತ್ರಿ ಜಾವಗಳಲ್ಲಿ ನಿನ್ನನ್ನು ಧ್ಯಾನಿಸುವಾಗ
63:6b.PSA.063.006 ಸಾರದಿಂದಲೂ ಕೊಬ್ಬಿನಿಂದಲೂ ನನ್ನ ಪ್ರಾಣವು ತೃಪ್ತಿಯಾಗುವದು; ಆಗ ನನ್ನ ಬಾಯಿಯು ಉತ್ಸಾಹದ ತುಟಿಗಳಿಂದ ನಿನ್ನನ್ನು ಸ್ತುತಿಸುವದು.
63:7b.PSA.063.007 ನೀನು ನನ್ನ ಸಹಾಯಕನಾಗಿರುವದರಿಂದ ನಿನ್ನ ರೆಕ್ಕೆಗಳ ನೆರಳಿನಲ್ಲಿ ನಾನು ಉತ್ಸಾಹಪಡುವೆನು.
63:8b.PSA.063.008 ನನ್ನ ಪ್ರಾಣವು ನಿನ್ನನ್ನು ಹಿಂಬಾಲಿಸಿ ಬರುತ್ತದೆ; ನಿನ್ನ ಬಲಗೈ ನನ್ನನ್ನು ಗಟ್ಟಿ ಯಾಗಿ ಎತ್ತಿಹಿಡಿಯುತ್ತದೆ.
63:9b.PSA.063.009 ಆದರೆ ನನ್ನ ಪ್ರಾಣವನ್ನು ನಾಶಮಾಡುವದಕ್ಕೆ ಹುಡುಕುವವರು ಭೂಮಿಯ ಕೆಳಭಾಗಗಳಿಗೆ ಹೋಗು ವರು.
63:10b.PSA.063.010 ಕತ್ತಿಯಿಂದ ಅವರು ಬೀಳುವರು; ನರಿಗಳ ಪಾಲಾಗುವರು.ಆದರೆ ಅರಸನು ದೇವರಲ್ಲಿ ಸಂತೋಷಿಸುವನು; ಆತನ ಮೇಲೆ ಆಣೆ ಇಡುವ ವರೆಲ್ಲರು ಹೆಚ್ಚಳಪಡುವರು; ಆದರೆ ಸುಳ್ಳಾಡುವವರ ಬಾಯಿ ಮುಚ್ಚಲ್ಪಡುವದು.
63:11b.PSA.063.011 ಆದರೆ ಅರಸನು ದೇವರಲ್ಲಿ ಸಂತೋಷಿಸುವನು; ಆತನ ಮೇಲೆ ಆಣೆ ಇಡುವ ವರೆಲ್ಲರು ಹೆಚ್ಚಳಪಡುವರು; ಆದರೆ ಸುಳ್ಳಾಡುವವರ ಬಾಯಿ ಮುಚ್ಚಲ್ಪಡುವದು.
64
64:1b.PSA.064.001 ಓ ದೇವರೇ ನನ್ನ ಪ್ರಾರ್ಥನೆಯಲ್ಲಿ ನನ್ನ ಸ್ವರವನ್ನು ಕೇಳು; ಶತ್ರುವಿನ ಹೆದರಿಕೆ ಯಿಂದ ನನ್ನ ಜೀವವನ್ನು ಕಾಯಿ.
64:2b.PSA.064.002 ದುರ್ಮಾರ್ಗಿಗಳ ಗುಪ್ತವಾದ ಆಲೋಚನೆಗಳಿಗೂ ದುಷ್ಟರ ಹೊಂಚಿಗೂ ನನ್ನನ್ನು ಮರೆಮಾಡು.
64:3b.PSA.064.003 ಅವರು ತಮ್ಮ ನಾಲಿಗೆಯನ್ನು ಕತ್ತಿಯ ಹಾಗೆ ಮಸೆಯುತ್ತಾರೆ. ಕಹಿ ಮಾತುಗಳೆಂಬ ಬಾಣಗಳನ್ನು ಹೂಡುತ್ತಾರೆ.
64:4b.PSA.064.004 ನಿರ್ದೋಷಿಯ ಕಡೆಗೆ ಗುಪ್ತವಾಗಿ ಫಕ್ಕನೆ ಎಸೆಯುವದಕ್ಕೆ ಅವರು ಭಯ ಪಡುವದಿಲ್ಲ.
64:5b.PSA.064.005 ಕೆಟ್ಟಕಾರ್ಯದಲ್ಲಿ ಅವರು ತಮ್ಮನ್ನು ತಾವೇ ಪ್ರೋತ್ಸಾಹ ಮಾಡಿಕೊಳ್ಳುತ್ತಾರೆ; ಬಲೆಗಳನ್ನು ಒಡ್ಡು ವದಕ್ಕೆ ಮಾತನಾಡುತ್ತಾ--ನಮ್ಮನ್ನು ನೋಡುವವ ರಾರೆಂದು ಹೇಳುತ್ತಾರೆ.
64:6b.PSA.064.006 ಅವರು ದ್ರೋಹಗಳನ್ನು ಹುಡುಕುತ್ತಾರೆ; ಎಚ್ಚರಿಕೆಯಿಂದ ಹುಡುಕಿದ್ದನ್ನು ಅವರು ಪೂರೈಸುತ್ತಾರೆ; ಅವರೆಲ್ಲರ ಅಂತರಗವೂ ಹೃದಯವೂ ಅಶೋದ್ಯವಾಗಿವೆ.
64:7b.PSA.064.007 ದೇವರು ಅವರ ಕಡೆಗೆ ಬಾಣವನ್ನು ಎಸೆಯು ವಾಗ ಫಕ್ಕನೆ ಅವರಿಗೆ ಗಾಯಗಳಾಗುವವು.
64:8b.PSA.064.008 ಹೀಗೆ ತಮ್ಮ ನಾಲಿಗೆಯು ತಮ್ಮ ಮೇಲೆ ಬೀಳುವಂತೆ ಮಾಡಿ ಕೊಳ್ಳುತ್ತಾರೆ. ಅವರನ್ನು ನೋಡುವವರೆಲ್ಲರೂ ಓಡಿ ಹೋಗುವರು.
64:9b.PSA.064.009 ಎಲ್ಲಾ ಮನುಷ್ಯರು ಭಯಪಟ್ಟು ದೇವರ ಕಾರ್ಯವನ್ನು ತಿಳಿಸುವರು; ಆತನ ಕೆಲಸ ವನ್ನು ಬುದ್ಧಿಯಿಂದ ಗ್ರಹಿಸುವರು;ನೀತಿವಂತನು ಕರ್ತನಲ್ಲಿ ಸಂತೋಷಪಟ್ಟು ಆತನಲ್ಲಿ ಭರವಸವಿ ಡುವನು. ಯಥಾರ್ಥ ಹೃದಯವುಳ್ಳವರೆಲ್ಲರು ಹೆಚ್ಚಳ ಪಡುವರು.
64:10b.PSA.064.010 ನೀತಿವಂತನು ಕರ್ತನಲ್ಲಿ ಸಂತೋಷಪಟ್ಟು ಆತನಲ್ಲಿ ಭರವಸವಿ ಡುವನು. ಯಥಾರ್ಥ ಹೃದಯವುಳ್ಳವರೆಲ್ಲರು ಹೆಚ್ಚಳ ಪಡುವರು.
65
65:1b.PSA.065.001 ದೇವರೇ, ಚೀಯೋನಿನಲ್ಲಿ ನಿನಗೋಸ್ಕರ ಸ್ತೋತ್ರವು ಕಾದಿದೆ. ನಿನಗೆ ಅಲ್ಲಿ ಪ್ರಮಾ ಣವು ಸಲ್ಲಿಸಲ್ಪಡುವದು.
65:2b.PSA.065.002 ಪ್ರಾರ್ಥನೆಯನ್ನು ಕೇಳು ವಾತನೇ, ನಿನ್ನ ಬಳಿಗೆ ಎಲ್ಲಾ ಜನರು ಬರುವರು.
65:3b.PSA.065.003 ಅಕ್ರಮಗಳು ನನಗೆ ವಿರೋಧವಾಗಿ ಬಲಗೊಂಡಿವೆ; ನಮ್ಮ ದ್ರೋಹಗಳನ್ನಾದರೋ ನೀನು ತೊಳೆದು ಬಿಡುವಿ.
65:4b.PSA.065.004 ನೀನು ಆದುಕೊಂಡು ನಿನ್ನ ಬಳಿಗೆ ಬರ ಮಾಡಿಕೊಳ್ಳುವವನು ಧನ್ಯನು; ನಿನ್ನ ಅಂಗಳಗಳಲ್ಲಿ ಅವನು ವಾಸವಾಗಿರುವನು. ನಿನ್ನ ಪರಿಶುದ್ಧ ಮಂದಿರ ವಾದ ನಿನ್ನ ಆಲಯದ ಒಳ್ಳೇದರಿಂದ ನಾವು ತೃಪ್ತರಾಗುವೆವು.
65:5b.PSA.065.005 ನಮ್ಮ ರಕ್ಷಣೆಯ ಓ ದೇವರೇ, ಭಯಂಕರವಾದ ವುಗಳಿಂದ ನೀತಿಯಲ್ಲಿ ನೀನು ನಮಗೆ ಉತ್ತರ ಕೊಡುವಿ; ಭೂಮಿಯ ಎಲ್ಲಾ ಅಂತ್ಯಗಳಿಗೂ ಸಮುದ್ರ ದಲ್ಲಿ ದೂರವಾದವರಿಗೂ ನೀನು ಭರವಸವಾಗಿದ್ದೀ.
65:6b.PSA.065.006 ಬೆಟ್ಟಗಳನ್ನು ತನ್ನ ಶಕ್ತಿಯಿಂದ ನಿಲ್ಲಿಸುವಾತನೇ, ಪರಾಕ್ರಮದಿಂದ ನಡುಕಟ್ಟಿಕೊಂಡಾತನೇ,
65:7b.PSA.065.007 ಸಮುದ್ರ ಗಳ ಘೋಷವನ್ನೂ ಅವುಗಳ ತೆರೆಗಳ ಘೋಷವನ್ನೂ ಪ್ರಜೆಗಳ ಕೋಲಾಹಲವನ್ನೂ ಅಣಗಿಸುವಾತನೇ,
65:8b.PSA.065.008 ಭೂಮಿಯ ಕಟ್ಟಕಡೆಗಳಲ್ಲಿ ವಾಸಿಸುವವರು ಸಹ ನಿನ್ನ ಗುರುತುಗಳಿಗೆ ಭಯಪಡುವರು. ಉದಯಾಸ್ತ ಮಾನ ಸಮಯಗಳನ್ನು ಉತ್ಸಾಹಧ್ವನಿಗೈಯುವಂತೆ ನೀನು ಮಾಡುತ್ತೀ.
65:9b.PSA.065.009 ನೀನು ಭೂಮಿಯನ್ನು ಕಟಾಕ್ಷಿಸಿ ಅದನ್ನು ತೋಯಿಸಿ ನೀರಿನಿಂದ ತುಂಬಿರುವಂತೆ ದೇವರ ನದಿ ಯಿಂದ ಅದನ್ನು ಚೆನ್ನಾಗಿ ಹದಗೊಳಿಸುತ್ತೀ; ಹೀಗೆ ಭೂಮಿಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತೀ.
65:10b.PSA.065.010 ಉಳುವೆಯ ಸಾಲುಗಳನ್ನು ಸಮೃದ್ಧಿ ಯಾಗಿ ತ್ಯಾವಿಸುತ್ತೀ; ನೇಗಿಲ ಸಾಲುಗಳನ್ನು ಸಮಮಾಡುತ್ತೀ; ಸುರಿಯುವ ಮಳೆಯಿಂದ ಅದನ್ನು ಮೃದು ಮಾಡುತ್ತೀ; ಅದರ ಮೊಳಿಕೆಯನ್ನು ಆಶೀರ್ವದಿಸುತ್ತೀ.
65:11b.PSA.065.011 ವರುಷಕ್ಕೆ ನಿನ್ನ ಸುಭಿಕ್ಷಕಿರೀಟ ಇಡುತ್ತೀ; ನಿನ್ನ ಮಾರ್ಗಗಳಲ್ಲಿ ಸಮೃದ್ಧಿಯನ್ನು ಸುರಿಸುತ್ತೀ.
65:12b.PSA.065.012 ಅರ ಣ್ಯದ ಹುಲ್ಲುಗಾವಲುಗಳ ಮೇಲೂ ಸುರಿಯ ಮಾಡುತ್ತೀ; ಚಿಕ್ಕಗುಡ್ಡಗಳು ಎಲ್ಲಾ ಕಡೆಗಳಲ್ಲೂ ಉಲ್ಲಾ ಸಿಸುತ್ತವೆ.ಹುಲ್ಲುಗಾವಲುಗಳು ಮಂದೆಗಳನ್ನು ಹೊದ್ದುಕೊಳ್ಳುತ್ತವೆ; ಕಣಿವೆಗಳೂ ಧಾನ್ಯದಿಂದ ಮುಚ್ಚಿ ರುತ್ತವೆ, ಉತ್ಸಾಹಪಡುತ್ತವೆ ಮತ್ತು ಹಾಡುತ್ತವೆ.
65:13b.PSA.065.013 ಹುಲ್ಲುಗಾವಲುಗಳು ಮಂದೆಗಳನ್ನು ಹೊದ್ದುಕೊಳ್ಳುತ್ತವೆ; ಕಣಿವೆಗಳೂ ಧಾನ್ಯದಿಂದ ಮುಚ್ಚಿ ರುತ್ತವೆ, ಉತ್ಸಾಹಪಡುತ್ತವೆ ಮತ್ತು ಹಾಡುತ್ತವೆ.
66
66:1b.PSA.066.001 ಸಮಸ್ತ ದೇಶಗಳೇ, ದೇವರಿಗೆ ಉತ್ಸಾಹ ಧ್ವನಿಗೈಯಿರಿ;
66:2b.PSA.066.002 ಆತನ ಹೆಸರಿನ ಘನವನ್ನು ಕೀರ್ತಿಸಿರಿ; ಆತನ ಸ್ತೋತ್ರವನ್ನು ಘನವುಳ್ಳದ್ದಾಗಿ ಮಾಡಿರಿ.
66:3b.PSA.066.003 ದೇವರಿಗೆ--ನಿನ್ನ ಕೆಲಸಗಳಿಂದ ನೀನು ಎಷ್ಟು ಭಯಂಕರನಾಗಿದ್ದೀ ಎಂದು ಹೇಳಿರಿ. ನಿನ್ನ ಮಹಾಬಲದ ನಿಮಿತ್ತ ನಿನ್ನ ಶತ್ರುಗಳು ತಾವೇ ನಿನಗೆ ಅಧೀನರಾಗುವರು;
66:4b.PSA.066.004 ಭೂನಿವಾಸಿಗಳೆಲ್ಲ ನಿನ್ನನ್ನು ಹಾಡಿ ಆರಾಧಿಸಿ ನಿನ್ನ ನಾಮವನ್ನು ಕೀರ್ತಿಸುವರು. ಸೆಲಾ.
66:5b.PSA.066.005 ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಮನುಷ್ಯರ ಮಕ್ಕಳ ಕಡೆಗೆ ಆತನು ತನ್ನ ಕಾರ್ಯಗಳಲ್ಲಿ ಭಯಂಕರನಾಗಿದ್ದಾನೆ.
66:6b.PSA.066.006 ಆತನು ಸಮುದ್ರವನ್ನು ಒಣ ಗಿದ ಭೂಮಿಗೆ ತಿರುಗಿಸಿದನು; ಅವರು ಕಾಲು ನಡಿಗೆ ಯಾಗಿ ಪ್ರವಾಹವನ್ನು ದಾಟಿದರು; ಅಲ್ಲಿ ನಾವು ಆತನಲ್ಲಿ ಸಂತೋಷಿಸಿದೆವು.
66:7b.PSA.066.007 ಆತನು ತನ್ನ ಪರಾಕ್ರಮ ದಿಂದ ಎಂದೆಂದಿಗೂ ಆಳುವವನಾಗಿದ್ದಾನೆ; ಆತನ ಕಣ್ಣುಗಳು ಜನಾಂಗಗಳನ್ನು ದೃಷ್ಟಿಸುತ್ತವೆ; ಎದುರು ಬೀಳುವವರು ತಮ್ಮನ್ನು ತಾವೇ ಹೆಚ್ಚಿಸಿಕೊಳ್ಳದೆ ಇರಲಿ. ಸೆಲಾ.
66:8b.PSA.066.008 ಓ ಜನರೇ, ನೀವು ದೇವರನ್ನು ಸ್ತುತಿಸಿರಿ; ಆತನ ಸ್ತೊತ್ರದ ಸ್ವರವು ಕೇಳಲ್ಪಡುವಂತೆ ಮಾಡಿರಿ.
66:9b.PSA.066.009 ಆತನು ನಮ್ಮ ಪ್ರಾಣವನ್ನು ಜೀವದಲ್ಲಿಟ್ಟು ನಮ್ಮ ಪಾದಗಳನ್ನು ಕದಲುವಂತೆ ಬಿಡಲಿಲ್ಲ.
66:10b.PSA.066.010 ಓ ದೇವರೇ, ನೀನು ನಮ್ಮನ್ನು ಶೋಧಿಸಿದ್ದೀ. ಬೆಳ್ಳಿಯನ್ನು ಪುಟಕ್ಕೆ ಹಾಕುವ ಪ್ರಕಾರ ನಮ್ಮನ್ನು ಶೋಧಿಸಿದ್ದೀ.
66:11b.PSA.066.011 ನೀನು ಬಲೆಯೊಳಗೆ ನಮ್ಮನ್ನು ಬರಮಾಡಿದ್ದಲ್ಲದೆ ನಮ್ಮ ಸೊಂಟಗಳ ಮೇಲೆ ವ್ಯಥೆಯನ್ನು ಹೊರಿಸಿದ್ದೀ;
66:12b.PSA.066.012 ಮನುಷ್ಯರು ನಮ್ಮ ತಲೆಗಳ ಮೇಲೆ ಸವಾರಿ ಮಾಡುವಂತೆ ಮಾಡಿದ್ದೀ. ನಾವು ಬೆಂಕಿಯಲ್ಲಿಯೂ ನೀರಿನಲ್ಲಿಯೂ ದಾಟಿದೆವು; ಆದರೆ ನೀನು ನಮ್ಮನ್ನು ಐಶ್ವರ್ಯದ ಸ್ಥಳಕ್ಕೆ ಬರಮಾಡಿದ್ದೀ;
66:13b.PSA.066.013 ನಾನು ದಹನ ಬಲಿಗಳೊಂದಿಗೆ ನಿನ್ನ ಆಲಯಕ್ಕೆ ಹೋಗುವೆನು.
66:14b.PSA.066.014 ನನ್ನ ಇಕ್ಕಟ್ಟಿನಲ್ಲಿ ತುಟಿಗಳು ಉಚ್ಚರಿಸಿದಂಥ, ಬಾಯಿ ನುಡಿದಂಥ, ಹರಕೆಗಳನ್ನು ನಾನು ನಿನಗೆ ಸಲ್ಲಿಸುವೆನು.
66:15b.PSA.066.015 ಕೊಬ್ಬಿದ ದಹನಬಲಿಗಳನ್ನು ಟಗರುಗಳ ಧೂಪದ ಸಂಗಡ ನಿನಗೆ ಅರ್ಪಿಸುವೆನು; ಹೋತಗಳ ಸಂಗಡ ಎತ್ತುಗಳನ್ನು ಅರ್ಪಿಸುವೆನು. ಸೆಲಾ.
66:16b.PSA.066.016 ದೇವರಿಗೆ ಭಯಪಡುವವರೆಲ್ಲರೇ, ಬನ್ನಿರಿ, ಕೇಳಿರಿ; ಆತನು ನನ್ನ ಪ್ರಾಣಕ್ಕೆ ಮಾಡಿದ್ದನ್ನು ಪ್ರಕಟಿ ಸುವೆನು.
66:17b.PSA.066.017 ನನ್ನ ಬಾಯಿಂದ ಆತನನ್ನು ಕೂಗಿದೆನು; ನನ್ನ ನಾಲಿಗೆಯಿಂದ ಆತನನ್ನು ಉನ್ನತಪಡಿಸಿದೆನು.
66:18b.PSA.066.018 ನನ್ನ ಹೃದಯದಲ್ಲಿ ಅಪರಾಧವನ್ನು ನಾನು ಆಶಿಸಿದ್ದರೆ ಕರ್ತನು ನನ್ನ ಪ್ರಾರ್ಥನೆಯನ್ನು ಕೇಳುವದಿಲ್ಲ.
66:19b.PSA.066.019 ಆದರೆ ನಿಜವಾಗಿ ನನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾನಲ್ಲಾ! ಆತನು ನನ್ನ ಪ್ರಾರ್ಥನೆಯ ಸ್ವರವನ್ನು ಆಲೈಸಿದ್ದಾನಲ್ಲಾ!ನನ್ನ ಪ್ರಾರ್ಥನೆಯನ್ನೂ ನನ್ನ ಬಳಿಯಿಂದ ತನ್ನ ಕರುಣೆಯನ್ನೂ ತೊಲಗಿಸದೆ ಇರುವ ದೇವರಿಗೆ ಸ್ತೋತ್ರವಾಗಲಿ.
66:20b.PSA.066.020 ನನ್ನ ಪ್ರಾರ್ಥನೆಯನ್ನೂ ನನ್ನ ಬಳಿಯಿಂದ ತನ್ನ ಕರುಣೆಯನ್ನೂ ತೊಲಗಿಸದೆ ಇರುವ ದೇವರಿಗೆ ಸ್ತೋತ್ರವಾಗಲಿ.
67
67:1b.PSA.067.001 ದೇವರು ನಮಗೆ ಕರುಣೆಯುಳ್ಳವನಾಗಿದ್ದು ನಮ್ಮನ್ನು ಆಶೀರ್ವದಿಸಲಿ; ಆತನು ತನ್ನ ಮುಖವನ್ನು ನಮ್ಮ ಮೇಲೆ ಪ್ರಕಾಶಿಸಮಾಡಲಿ. ಸೆಲಾ.
67:2b.PSA.067.002 ಆಗ ನಿನ್ನ ಮಾರ್ಗವೂ ನಿನ್ನ ರಕ್ಷಣೆಯ ಸ್ವಸ್ಥತೆಯೂ, ಭೂಮಿಯಲ್ಲಿ, ಎಲ್ಲಾ ಜನಾಂಗಗಳಿಗೆ ತಿಳಿಯಲ್ಪಡು ವದು.
67:3b.PSA.067.003 ಓ ದೇವರೇ, ಜನರು ನಿನ್ನನ್ನು ಕೊಂಡಾಡಲಿ. ಜನರೆಲ್ಲಾ ನಿನ್ನನ್ನು ಕೊಂಡಾಡಲಿ.
67:4b.PSA.067.004 ಜನಾಂಗಗಳು ಸಂತೋಷಪಟ್ಟು ಉತ್ಸಾಹಕ್ಕಾಗಿ ಹಾಡಲಿ; ನೀನು ಜನರನ್ನು ನೀತಿಯಿಂದ ನ್ಯಾಯತೀರಿಸಿ ಜನಾಂಗಗಳನ್ನು ಭೂಮಿಯಲ್ಲಿ ಪರಿಪಾಲಿಸುತ್ತೀ. ಸೆಲಾ.
67:5b.PSA.067.005 ಓ ದೇವರೇ, ಜನರು ನಿನ್ನನ್ನು ಕೊಂಡಾಡಲಿ; ಜನರೆಲ್ಲಾ ನಿನ್ನನ್ನು ಕೊಂಡಾಡಲಿ.
67:6b.PSA.067.006 ಆಗ ಭೂಮಿಯು ತನ್ನ ಸಮೃದ್ಧಿಯಾದ ಬೆಳೆಯನ್ನು ಕೊಡುವದು; ದೇವರೇ, ಹೌದು, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸುವನು.ದೇವರು ನಮ್ಮನ್ನು ಆಶೀರ್ವದಿಸುವನು; ಭೂಮಿಯ ಕೊನೆಯ ಭಾಗಗಳು ಆತನಿಗೆ ಭಯಪಡುವವು.
67:7b.PSA.067.007 ದೇವರು ನಮ್ಮನ್ನು ಆಶೀರ್ವದಿಸುವನು; ಭೂಮಿಯ ಕೊನೆಯ ಭಾಗಗಳು ಆತನಿಗೆ ಭಯಪಡುವವು.
68
68:1b.PSA.068.001 ದೇವರು ಎದ್ದೇಳುವಾಗ, ಆತನನ್ನು ಹಗೆ ಮಾಡುವವರು ಚದುರಿಸಲ್ಪಡಲಿ; ಆತ ನನ್ನು ವಿರೋಧಿಸುವವರು ಆತನ ಸಮ್ಮುಖದಿಂದ ಓಡಿ ಹೋಗುತ್ತಾರೆ.
68:2b.PSA.068.002 ಹೊಗೆ ಹಾರಿಹೋಗುವ ಮೇರೆಗೆ ಅವರನ್ನು ಓಡಿಸಿಬಿಡು; ಮೇಣವು ಬೆಂಕಿಯ ಮುಂದೆ ಕರಗುವ ಹಾಗೆ ದುಷ್ಟರು ದೇವರ ಮುಂದೆ ನಾಶ ವಾಗಲಿ.
68:3b.PSA.068.003 ಆದರೆ ನೀತಿವಂತರು ಸಂತೋಷಿಸಲಿ; ದೇವರ ಮುಂದೆ ಉತ್ಸಾಹಪಡಲಿ; ಹೌದು, ಅವರು ಅತಿಸಂತೋಷದಿಂದ ಹರ್ಷಿಸುವವರಾಗಲಿ.
68:4b.PSA.068.004 ದೇವರಿಗೆ ಹಾಡಿರಿ; ಆತನ ನಾಮಕ್ಕೆ ಸ್ತುತಿಗಳನ್ನು ಹಾಡಿರಿ; ಆಕಾಶಗಳ ಮೇಲೆ ಯಾಹು ಎಂಬ ತನ್ನ ಹೆಸರಿನ ಮೇಲೆ ಸವಾರಿಮಾಡುವಾತನನ್ನು ಕೊಂಡಾಡಿ ಆತನ ಮುಂದೆ ಉತ್ಸಾಹಪಡಿರಿ.
68:5b.PSA.068.005 ದೇವರು ತನ್ನ ಪರಿಶುದ್ಧಸ್ಥಾನದಲ್ಲಿ ದಿಕ್ಕಿಲ್ಲದವರಿಗೆ ತಂದೆಯೂ ವಿಧವೆಯರಿಗೆ ನ್ಯಾಯಾಧಿಪತಿಯೂ ಆಗಿದ್ದಾನೆ.
68:6b.PSA.068.006 ದೇವರು ಒಬ್ಬೊಂಟಿಗರನ್ನು ಕುಟುಂಬಸ್ತರನ್ನಾಗಿ ಮಾಡುತ್ತಾನೆ; ಸರಪಣಿಗಳಿಂದ ಬಂಧಿಸಲ್ಪಟ್ಟವರನ್ನು ಹೊರಗೆ ಬರಮಾಡುತ್ತಾನೆ; ಆದರೆ ಎದುರು ಬೀಳು ವವರು ಒಣಭೂಮಿಯಲ್ಲಿ ವಾಸಮಾಡುತ್ತಾರೆ.
68:7b.PSA.068.007 ಓ ದೇವರೇ, ನೀನು ನಿನ್ನ ಜನರ ಮುಂದೆ ಹೊರಟು ಕಾಡಿನಲ್ಲಿ ನಡೆದಾಗ, ಸೆಲಾ.
68:8b.PSA.068.008 ದೇವರು ಪ್ರತ್ಯಕ್ಷನಾಗಿ ದ್ದಾನೆಂದು ಭೂಮಿಯು ಕಂಪಿಸಿತು; ಮೇಘ ಮಂಡ ಲವು ಮಳೆಗರಿಯಿತು. ಇಸ್ರಾಯೇಲ್ಯರ ದೇವನಾದ ದೇವರು ಪ್ರತ್ಯಕ್ಷನಾಗಿದ್ದಾನೆಂದು ಆ ಸೀನಾಯಿ ಬೆಟ್ಟವು ಕದಲಿತು.
68:9b.PSA.068.009 ಓ ದೇವರೇ, ನೀನು ಸಮೃದ್ಧಿಯಾಗಿ ಮಳೆಯನ್ನು ಸುರಿಸಿದಿ; ಇದರಿಂದ ದಣಿದ ನಿನ್ನ ಬಾಧ್ಯ ತೆಯನ್ನು ನೀನು ಸ್ಥಿರಪಡಿಸಿದಿ.
68:10b.PSA.068.010 ನಿನ್ನ ಸಭೆಯು ಅದರಲ್ಲಿ ವಾಸಮಾಡಿತು; ಓ ದೇವರೇ, ನಿನ್ನ ಸಮೃದ್ಧಿ ಯಿಂದ ಬಡವರನ್ನು ತೃಪ್ತಿಪಡಿಸಿದಿ.
68:11b.PSA.068.011 ಕರ್ತನು ವಾಕ್ಯ ವನ್ನು ಕೊಟ್ಟನು; ಅದನ್ನು ಪ್ರಕಟಿಸಿದವರ ಗುಂಪು ದೊಡ್ಡದಾಗಿತ್ತು.
68:12b.PSA.068.012 ಸೈನ್ಯಗಳ ಅರಸರು ತ್ವರೆಯಾಗಿ ಓಡಿಹೋದರು; ಮನೆಯಲ್ಲಿ ವಾಸಿಸುವವಳು ಕೊಳ್ಳೆ ಯನ್ನು ಪಾಲು ಮಾಡಿಕೊಂಡಳು.
68:13b.PSA.068.013 ನೀವು ಮಡಿಕೆ ಗಳ ಮಧ್ಯದಲ್ಲಿ ಮಲಗಿದಾಗ್ಯೂ ಬೆಳ್ಳಿಯಿಂದಲೂ ಅದರ ರೆಕ್ಕೆಗಳು ಹಳದಿ ಚಿನ್ನದಿಂದಲೂ ಮುಚ್ಚಿದ ಪಾರಿವಾಳದ ರೆಕ್ಕೆಗಳ ಹಾಗಿದ್ದೀರಿ.
68:14b.PSA.068.014 ಸರ್ವಶಕ್ತನು ಅರಸುಗಳನ್ನು ಸಲ್ಮೋನಿನಲ್ಲಿ ಚದರಿಸಿದಾಗ ಅದರಲ್ಲಿ ಬಿಳೀ ಹಿಮದ ಹಾಗಿತ್ತು.
68:15b.PSA.068.015 ಬಾಷಾನ್ ಬೆಟ್ಟವು ದೇವರ ಬೆಟ್ಟದಂತೆ ಇದೆ; ಬಾಷಾನ್ ಬೆಟ್ಟವು ಉನ್ನತ ಬೆಟ್ಟವಾಗಿದೆ.
68:16b.PSA.068.016 ಉನ್ನತ ಬೆಟ್ಟಗಳೇ, ಯಾಕೆ ನೆಗೆಯುತ್ತೀರಿ? ದೇವರು ನಿವಾಸ ಕ್ಕಾಗಿ ಅಪೇಕ್ಷಿಸುವ ಬೆಟ್ಟವು ಇದೇ ಹೌದು, ಕರ್ತನು ಅದರಲ್ಲಿ ಸದಾಕಾಲಕ್ಕೆ ವಾಸಿಸುವನು.
68:17b.PSA.068.017 ದೇವರ ರಥಗಳು ಇಪ್ಪತ್ತು ಸಾವಿರವು, ಸಾವಿರಾರು ದೂತರು ಗಳು; ಕರ್ತನು ಸೀನಾಯಿಯಲ್ಲಿ ಇದ್ದ ಹಾಗೆ ಅವರೊಳಗೆ ಪರಿಶುದ್ಧ ಸ್ಥಳದಲ್ಲಿ ಇದ್ದಾನೆ.
68:18b.PSA.068.018 ನೀನು ಉನ್ನತಕ್ಕೆ ಏರಿಹೋಗಿ ಸೆರೆಯವರನ್ನು ಸೆರೆಯಾಗಿ ನಡೆಸಿದಿ, ಕರ್ತನಾದ ದೇವರು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಮನುಷ್ಯರಿಗಾಗಿಯೂ ಹೌದು, ತಿರುಗಿ ಬಿದ್ದವರಿಗಾಗಿಯೂ ಸ್ವೀಕರಿಸಿದಿ.
68:19b.PSA.068.019 ಪ್ರತಿ ದಿನವೂ ನಮ್ಮನ್ನು ಮೇಲುಗಳಿಂದ ತುಂಬಿಸು,ಕರ್ತನು ಅಂದರೆ ನಮ್ಮ ರಕ್ಷಣೆಯ ದೇವರು ಸ್ತುತಿ ಹೊಂದಲಿ. ಸೆಲಾ.
68:20b.PSA.068.020 ನಮ್ಮ ದೇವರು ರಕ್ಷಣೆಯ ದೇವರಾಗಿದ್ದಾನೆ; ನಮ್ಮ ಕರ್ತನಾದ ದೇವರು ಮರಣದಿಂದ ತಪ್ಪಿಸಲು ಶಕ್ತನಾಗಿದ್ದಾನೆ.
68:21b.PSA.068.021 ದೇವರು ತನ್ನ ಶತ್ರುಗಳ ತಲೆ ಯನ್ನೂ ತನ್ನ ಅಪರಾಧಗಳಲ್ಲಿ ಮುಂದುವರಿಯುವ ತುಂಬು ಗೂದಲಿನ ತಲೆಯನ್ನೂ ಗಾಯಪಡಿಸುತ್ತಾನೆ.
68:22b.PSA.068.022 ಬಾಷಾನಿನಿಂದ ತಿರಿಗಿ ಬರಮಾಡುವೆನು, ಸಮು ದ್ರದ ಅಗಾಧಗಳಿಂದ ನನ್ನ ಜನರನ್ನು ತಿರಿಗಿ ಬರ ಮಾಡುವೆನು ಎಂದು ಕರ್ತನು ಹೇಳಿದ್ದಾನೆ.
68:23b.PSA.068.023 ನಿನ್ನ ಪಾದವೂ ನಿನ್ನ ಶತ್ರುಗಳ ರಕ್ತದಲ್ಲಿ ಕಲಕುವ ಹಾಗೆ ಮಾಡುವೆನು. ನಿನ್ನ ನಾಯಿಗಳ ನಾಲಿಗೆಯೂ ಸಹ ಹಾಗೆಯೇ ಮಾಡುವದು.
68:24b.PSA.068.024 ದೇವರೇ, ನಿನ್ನ ಹೋಗೋಣಗಳನ್ನು ಪರಿಶುದ್ಧ ಸ್ಥಳದಲ್ಲಿ ನನ್ನ ದೇವರ ಮತ್ತು ನನ್ನ ಅರಸನ ಹೋಗೋಣಗಳನ್ನು ಅವರು ನೋಡಿದ್ದಾರೆ.
68:25b.PSA.068.025 ಹಾಡು ವವರು ಮುಂದಾಗಿಯೂ ಬಾರಿಸುವವರು ಹಿಂದಾ ಗಿಯೂ ಹೋದರು, ಅವರಲ್ಲಿ ದಮ್ಮಡಿ ಬಾರಿಸುವ ಕನ್ಯೆಯರು ಇದ್ದರು.
68:26b.PSA.068.026 ಸಭೆಗಳಲ್ಲಿ ದೇವರನ್ನು ಸ್ತುತಿ ಸಿರಿ; ಇಸ್ರಾಯೇಲನ ಬುಗ್ಗೆಯಿಂದ ಕರ್ತನನ್ನು ಸ್ತುತಿ ಸಿರಿ.
68:27b.PSA.068.027 ಅಲ್ಲಿ ಅವರನ್ನಾಳುವವರ ಕೂಡ ಚಿಕ್ಕ ಬೆನ್ಯಾ ವಿಾನನು ಅವರ ನಾಯಕರಾದ ಯೆಹೂದನ ಪ್ರಧಾ ನರೂ ಅವರ ಸಮೂಹವೂ ಜೆಬುಲೂನನ, ನಫ್ತಾ ಲಿಯ ಪ್ರಧಾನರೂ ಇದ್ದಾರೆ.
68:28b.PSA.068.028 ನಿನ್ನ ದೇವರು ನಿನ್ನ ಬಲವನ್ನು ಆಜ್ಞಾಪಿಸಿದ್ದಾನೆ; ಓ ದೇವರೇ, ನಮಗೋಸ್ಕರ ನಡಿಸಿದ ಕಾರ್ಯವನ್ನು ಬಲಪಡಿಸು.
68:29b.PSA.068.029 ಯೆರೂಸಲೇಮಿನಲ್ಲಿರುವ ನಿನ್ನ ಮಂದಿ ರದ ನಿಮಿತ್ತ ಅರಸುಗಳು ನಿನಗೆ ಕಾಣಿಕೆಗಳನ್ನು ತರು ವರು.
68:30b.PSA.068.030 ಪ್ರತಿಯೊಬ್ಬನು ಬೆಳ್ಳಿಯ ತುಂಡುಗಳನ್ನು ಸಮರ್ಪಿಸುವ ವರೆಗೆ ಜನರ ಕರುಗಳ ಸಂಗಡ ಹೋರಿ ಗಳ ಗುಂಪನ್ನು ಭಲ್ಲೆಗಾರರ ಗುಂಪುನ್ನು ಗದರಿಸು. ಕಾಳಗದಲ್ಲಿ ಸಂತೋಷ ಪಡುವ ಜನರನ್ನು ನೀನು ಚದರಿಸು.
68:31b.PSA.068.031 ಐಗುಪ್ತದಿಂದ ಪ್ರಧಾನರು ಬರುವರು; ಕೂಷ್ ತನ್ನ ಕೈಗಳನ್ನು ದೇವರ ಕಡೆಗೆ ಬೇಗ ಚಾಚುವದು.
68:32b.PSA.068.032 ಭೂಮಿಯ ರಾಜ್ಯಗಳೇ, ನೀವು ದೇವರಿಗೆ ಹಾಡಿರಿ; ಕರ್ತನಿಗೆ ಸ್ತುತಿಗಳನ್ನು ಹಾಡಿರಿ. ಸೆಲಾ.
68:33b.PSA.068.033 ಅನಾದಿಯಿಂದಿದ್ದ ಆಕಾಶಗಳಲ್ಲಿ ಸವಾರಿಮಾಡು ವಾತನಿಗೆ ಹಾಡಿರಿ; ಇಗೋ, ಆತನು ತನ್ನ ಮಹಾ ಧ್ವನಿಯಿಂದ ಧ್ವನಿಗೈಯುತ್ತಾನೆ.
68:34b.PSA.068.034 ದೇವರ ಬಲವನ್ನು ವಿವರಿಸಿರಿ; ಇಸ್ರಾಯೇಲಿನ ಮೇಲೆ ಆತನಿಗೆ ಘನ ತೆಯೂ ಮೇಘಗಳಲ್ಲಿ ಆತನಿಗೆ ಬಲವೂ ಇರುತ್ತದೆ.ಓ ದೇವರೇ, ನಿನ್ನ ಪರಿಶುದ್ಧ ಸ್ಥಳಗಳಿಂದ ನೀನು ಭಯಂಕರನಾಗಿದ್ದೀ; ಇಸ್ರಾಯೇಲಿನ ದೇವರಾದ ಈತನೇ ಜನರಿಗೆ ಬಲವನ್ನೂ ಶಕ್ತಿಯನ್ನೂ ಕೊಡುತ್ತಾನೆ. ದೇವರಿಗೆ ಸ್ತುತಿಯಾಗಿಲಿ.
68:35b.PSA.068.035 ಓ ದೇವರೇ, ನಿನ್ನ ಪರಿಶುದ್ಧ ಸ್ಥಳಗಳಿಂದ ನೀನು ಭಯಂಕರನಾಗಿದ್ದೀ; ಇಸ್ರಾಯೇಲಿನ ದೇವರಾದ ಈತನೇ ಜನರಿಗೆ ಬಲವನ್ನೂ ಶಕ್ತಿಯನ್ನೂ ಕೊಡುತ್ತಾನೆ. ದೇವರಿಗೆ ಸ್ತುತಿಯಾಗಿಲಿ.
69
69:1b.PSA.069.001 ಓ ದೇವರೇ ನನ್ನನ್ನು ರಕ್ಷಿಸು; ನೀರು ನನ್ನ ಪ್ರಾಣದ ವರೆಗೂ ಬಂದಿದೆ.
69:2b.PSA.069.002 ನೆಲೆ ಸಿಕ್ಕದ ಆಳವಾದ ಕೆಸರಿನಲ್ಲಿ ನಾನು ಮುಳುಗುತ್ತೇನೆ; ನನ್ನ ಮೇಲೆ ಹಾದುಹೋಗುವ ನೀರಿನ ಪ್ರವಾಹಗಳ ಅಗಾಧದಲ್ಲಿ ನಾನು ಸಿಕ್ಕಿಕೊಂಡಿದ್ದೇನೆ.
69:3b.PSA.069.003 ನಾನು ಕೂಗಿ ದಣಿದಿದ್ದೇನೆ; ನನ್ನ ಗಂಟಲು ಒಣಗಿದೆ; ನಾನು ದೇವ ರನ್ನು ಎದುರು ನೋಡುವದರಿಂದ ನನ್ನ ಕಣ್ಣುಗಳು ಕ್ಷೀಣಿಸುತ್ತವೆ.
69:4b.PSA.069.004 ಕಾರಣವಿಲ್ಲದೆ ನನ್ನನ್ನು ಹಗೆ ಮಾಡು ವವರು ನನ್ನ ತಲೆಯ ಕೂದಲುಗಳಿಗಿಂತ ಹೆಚ್ಚಾಗಿ ದ್ದಾರೆ; ನನ್ನನ್ನು ಅನ್ಯಾಯವಾಗಿ ಸಂಹರಿಸುವ ನನ್ನ ಶತ್ರುಗಳೂ ಪ್ರಬಲವಾಗಿದ್ದಾರೆ; ನಾನು ತೆಗೆದು ಕೊಳ್ಳದ್ದನ್ನು ನನ್ನಿಂದ ದೋಚಿಕೊಂಡರು.
69:5b.PSA.069.005 ಓ ದೇವರೇ, ನೀನು ನನ್ನ ಮೂಢತನವನ್ನು ತಿಳಿದಿದ್ದೀ; ನನ್ನ ಪಾಪಗಳು ನಿನಗೆ ಮರೆಯಾಗಿಲ್ಲ.
69:6b.PSA.069.006 ಸೈನ್ಯಗಳ ಕರ್ತನಾದ ದೇವರೇ, ನಿನ್ನನ್ನು ನಿರೀಕ್ಷಿಸು ವವರು ನನ್ನ ದೆಸೆಯಿಂದ ನಾಚಿಕೆಪಡದಿರಲಿ; ಓ ಇಸ್ರಾಯೇಲಿನ ದೇವರೇ, ನಿನ್ನನ್ನು ಹುಡುಕುವವರು ನನ್ನಿಂದ ಅವಮಾನಪಡದಿರಲಿ.
69:7b.PSA.069.007 ನಿನ್ನ ನಿಮಿತ್ತ ನಿಂದೆ ಯನ್ನು ತಾಳಿದ್ದೇನೆ; ಅವಮಾನವು ನನ್ನ ಮುಖವನ್ನು ಮುಚ್ಚಿಯದೆ.
69:8b.PSA.069.008 ನನ್ನ ಸಹೋದರರಿಗೆ ಅನ್ಯನಾಗಿದ್ದೇನೆ; ನನ್ನ ಒಡಹುಟ್ಟಿದವರಿಗೆ ಪರಕೀಯನಾಗಿದ್ದೇನೆ.
69:9b.PSA.069.009 ನಿನ್ನ ಆಲಯದ ಆಸಕ್ತಿಯು ನನ್ನನ್ನು ತಿಂದುಬಿಟ್ಟಿದೆ; ನಿನ್ನನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಿದ್ದಿವೆ.
69:10b.PSA.069.010 ನನ್ನ ಪ್ರಾಣವು ಉಪವಾಸದಲ್ಲಿ ಶಿಕ್ಷಿಸಲ್ಪಟ್ಟು ಅತ್ತಾಗ ಅದು ನನಗೆ ನಿಂದೆ ಆಯಿತು.
69:11b.PSA.069.011 ಗೋಣಿತಟ್ಟನ್ನು ಸಹ ನನ್ನ ಉಡುಪಾಗಿ ಮಾಡಿಕೊಂಡಿದ್ದೇನೆ; ಹೀಗೆ ನಾನು ಅವರಿಗೆ ಗಾದೆ ಆದೆನು.
69:12b.PSA.069.012 ಬಾಗಲಲ್ಲಿ ಕೂತು ಕೊಳ್ಳುವವರು ನನಗೆ ವಿರೋಧವಾಗಿ ಮಾತನಾಡು ತ್ತಾರೆ; ನಾನು ಮದ್ಯಪಾನಿಗಳಿಗೆ ಸಂಗೀತವಾದೆನು.
69:13b.PSA.069.013 ಓ ಕರ್ತನೇ, ನಾನಾದರೋ ಅಂಗೀಕಾರದ ಸಮ ಯದಲ್ಲಿ ನಿನಗೆ ನನ್ನ ಪ್ರಾರ್ಥನೆಯನ್ನು ಮಾಡುವೆನು. ಓ ದೇವರೇ, ನಿನ್ನ ಅತಿಶಯವಾದ ಕರುಣೆಯಿಂದಲೂ ನಿನ್ನ ರಕ್ಷಣೆಯ ಸತ್ಯದಲ್ಲಿಯೂ ನನಗೆ ಉತ್ತರಕೊಡು.
69:14b.PSA.069.014 ನಾನು ಮುಳುಗದಂತೆ ನನ್ನನ್ನು ಕೆಸರಿನೊಳಗಿಂದ ಬಿಡಿಸು; ಹಗೆಮಾಡುವವರಿಂದ ನನ್ನನ್ನು ತಪ್ಪಿಸು, ನೀರಿನ ಅಗಾಧಗಳೊಳಗಿಂದಲೂ ನನಗೆ ಬಿಡುಗಡೆ ಯಾಗಲಿ
69:15b.PSA.069.015 ನೀರಿನ ಪ್ರವಾಹವು ನನ್ನ ಮೇಲೆ ಹಾದು ಹೋಗದೇ ಇರಲಿ; ಅಗಾಧವು ನನ್ನನ್ನು ನುಂಗದೆ ಇರಲಿ; ಕುಣಿಯು ನನಗಾಗಿ ತನ್ನ ಬಾಯನ್ನು ಮುಟ್ಟ ದಿರಲಿ.
69:16b.PSA.069.016 ಓ ಕರ್ತನೇ, ನನಗೆ ಉತ್ತರಕೊಡು;ನಿನ್ನ ಪ್ರೀತಿ ಕರುಣೆಯು ಒಳ್ಳೇದಾಗಿದೆ; ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ಕಡೆಗೆ ತಿರುಗು.
69:17b.PSA.069.017 ನಿನ್ನ ಮುಖವನ್ನು ನಿನ್ನ ಸೇವಕನಿಗೆ ಮರೆಮಾಡಬೇಡ; ನಾನು ಇಕ್ಕಟ್ಟಿನಲ್ಲಿದ್ದೇನೆ; ಬೇಗ ನನಗೆ ಉತ್ತರಕೊಡು.
69:18b.PSA.069.018 ಸವಿಾಪವಾಗಿದ್ದು ನನ್ನ ಪ್ರಾಣವನ್ನು ರಕ್ಷಿಸು ನನ್ನನ್ನು ನನ್ನ ಶತ್ರುಗಳ ನಿಮಿತ್ತ ವಾಗಿ ವಿಮೋಚಿಸು.
69:19b.PSA.069.019 ನೀನು ನನ್ನ ನಿಂದೆಯನ್ನೂ ನಾಚಿಕೆಯನ್ನೂ ಅವಮಾನವನ್ನೂ ತಿಳಿದಿದ್ದೀ; ನನ್ನ ವೈರಿಗಳೆಲ್ಲರು ನಿನ್ನ ಮುಂದೆ ಇದ್ದಾರೆ.
69:20b.PSA.069.020 ನಿಂದೆಯು ನನ್ನ ಹೃದಯವನ್ನು ಮುರಿದದೆ; ಭಾರದಿಂದ ನಾನು ತುಂಬಿದವನಾಗಿದ್ದೇನೆ, ಕನಿಕರಕ್ಕೋಸ್ಕರ ಕೆಲವರನ್ನು ನಿರೀಕ್ಷಿಸಿದೆನು, ಆದರೆ ಒಬ್ಬರೂ ಕಾಣಲಿಲ್ಲ. ಆದರಿಸುವವರಿಗೋಸ್ಕರ ಸಹ ಎದುರು ನೋಡಿದೆನು: ಆದರೆ ಯಾರೂ ಸಿಕ್ಕಲಿಲ್ಲ.
69:21b.PSA.069.021 ನನ್ನ ಆಹಾರಕ್ಕಾಗಿ ಕಹಿಯಾದದನ್ನು ಕೊಟ್ಟರು; ನನಗೆ ದಾಹವಾದಾಗ ಹುಳಿರಸವನ್ನು ಕುಡಿಯ ಕೊಟ್ಟರು.
69:22b.PSA.069.022 ಅವರ ಮೇಜು ಅವರ ಮುಂದೆ ಉರುಲಾ ಗಲಿ, ಸುಖವಾಗಿರುವವರಿಗೆ ಅದು ನೇಣೂ ಆಗಲಿ.
69:23b.PSA.069.023 ಅವರ ಕಣ್ಣಗಳು ಕಾಣದ ಹಾಗೆ ಕತ್ತಲಾಗಲಿ; ಅವರ ಸೊಂಟಗಳನ್ನು ಯಾವಾಗಲೂ ಕದಲಿಸು.
69:24b.PSA.069.024 ಅವರ ಮೇಲೆ ನಿನ್ನ ರೋಷವನ್ನು ಹೊಯ್ಯಿ; ನಿನ್ನ ಕೋಪದ ಉರಿಯು ಅವರನ್ನು ಹಿಡಿಯಲಿ.
69:25b.PSA.069.025 ಅವರ ವಾಸಸ್ಥಳವು ನಾಶವಾಗಲಿ; ಅವರ ಗುಡಾರಗಳಲ್ಲಿ ನಿವಾಸಿಯು ಇಲ್ಲದೆ ಹೋಗಲಿ.
69:26b.PSA.069.026 ನೀನು ಹೊಡೆದ ವನನ್ನು ಅವರು ಹಿಂಸಿಸುತ್ತಾರೆ, ನೀನು ಗಾಯಮಾಡಿ ದವರ ವ್ಯಸನವನ್ನು ಮಾತನಾಡಿಕೊಳ್ಳುತ್ತಾರೆ.
69:27b.PSA.069.027 ಅವರ ಅಕ್ರಮಕ್ಕೆ ಅಕ್ರಮವನ್ನು ಸೇರಿಸು; ಅವರು ನಿನ್ನ ನೀತಿಯಲ್ಲಿ ಸೇರದೆ ಇರಲಿ.
69:28b.PSA.069.028 ಜೀವದ ಪುಸ್ತಕದೊಳಗಿಂದ ಅವರು ಅಳಿಸಲ್ಪಡಲಿ; ನೀತಿವಂತರ ಸಂಗಡ ಅವರ ಹೆಸರು ಬರೆಯಲ್ಪಡದೆ ಇರಲಿ.
69:29b.PSA.069.029 ಆದರೆ ನಾನು ದೀನನಾಗಿಯೂ ವ್ಯಸನವುಳ್ಳವನಾಗಿಯೂ ಇದ್ದೇನೆ; ಓ ದೇವರೇ, ನಿನ್ನ ರಕ್ಷಣೆಯು ನನ್ನನ್ನು ಉನ್ನತದಲ್ಲಿರಿಸಲಿ.
69:30b.PSA.069.030 ದೇವರ ಹೆಸರನ್ನು ಹಾಡುತ್ತಾ ಸ್ತುತಿಸುವೆನು; ಸ್ತೋತ್ರದಿಂದ ಆತನನ್ನು ಘನಪಡಿ ಸುವೆನು.
69:31b.PSA.069.031 ಅದು ಕರ್ತನಿಗೆ ಕೊಂಬುಗಳೂ ಗೊರಸೆ ಗಳೂ ಉಳ್ಳ ಎಳೇ ಹೋರಿಗಳಿಗಿಂತ ಮೆಚ್ಚಿಕೆಯಾಗಿರು ವದು.
69:32b.PSA.069.032 ಇದನ್ನು ದೀನರು ನೋಡಿ, ಸಂತೋಷಿಸು ವರು. ದೇವರನ್ನು ಹುಡುಕುವ ನಿಮ್ಮ ಹೃದಯವು ಜೀವಿಸುವದು.
69:33b.PSA.069.033 ಕರ್ತನು ಬಡವರನ್ನು ಲಾಲಿಸಿ ತನ್ನ ಸೆರೆಯವರನ್ನು ತಿರಸ್ಕರಿಸುವದಿಲ್ಲ.
69:34b.PSA.069.034 ಆಕಾಶವೂ ಭೂಮಿಯೂ ಸಮುದ್ರಗಳೂ ಅವುಗಳಲ್ಲಿ ಸಂಚರಿಸುವುದೆಲ್ಲವೂ ಆತನನ್ನು ಸ್ತುತಿಸಲಿ.
69:35b.PSA.069.035 ದೇವರು ಚೀಯೋನನ್ನು ರಕ್ಷಿಸಿ ಯೆಹೂದದ ಪಟ್ಟ ಣಗಳನ್ನು ಕಟ್ಟುವನು; ಹೀಗೆ ಅವರು ಅಲ್ಲಿ ವಾಸ ಮಾಡಿ ಅದನ್ನು ಸ್ವಾಧೀನಪಡಿಸಿಕೊಳ್ಳುವರು.ಅವನ ಸೇವಕರ ಸಂತತಿಯು ಸಹ ಅದನ್ನು ಬಾಧ್ಯವಾಗಿ ಹೊಂದುವದು; ಆತನ ಹೆಸರನ್ನು ಪ್ರೀತಿಮಾಡುವವರು ಅದರಲ್ಲಿ ವಾಸಮಾಡುವರು.
69:36b.PSA.069.036 ಅವನ ಸೇವಕರ ಸಂತತಿಯು ಸಹ ಅದನ್ನು ಬಾಧ್ಯವಾಗಿ ಹೊಂದುವದು; ಆತನ ಹೆಸರನ್ನು ಪ್ರೀತಿಮಾಡುವವರು ಅದರಲ್ಲಿ ವಾಸಮಾಡುವರು.
70
70:1b.PSA.070.001 ಓ ದೇವರೇ, ನನ್ನನ್ನು ಬಿಡಿಸುವದಕ್ಕೂ ಕರ್ತನೇ, ನನ್ನ ಸಹಾಯಕ್ಕೂ ತ್ವರೆಪಡು.
70:2b.PSA.070.002 ನನ್ನ ಪ್ರಾಣವನ್ನು ಹುಡುಕುವವರು ನಾಚಿಕೊಂಡು ಲಜ್ಜೆಪಡಲಿ; ನನ್ನ ಕೇಡಿನಲ್ಲಿ ಸಂತೋಷಿಸುವವರು ಹಿಂದಿರುಗಿ ಗಲಿಬಿಲಿಯಾಗಲಿ.
70:3b.PSA.070.003 ಆಹಾ, ಆಹಾ ಎಂದು ಹೇಳುವವರು ತಮ್ಮ ನಾಚಿಕೆಯ ಫಲಕ್ಕಾಗಿ ತಿರುಗಲಿ.
70:4b.PSA.070.004 ನಿನ್ನನ್ನು ಹುಡುಕುವವರೆಲ್ಲರು ನಿನ್ನಲ್ಲಿ ಆನಂದಪಟ್ಟು ಸಂತೋಷಿಸಲಿ; ನಿನ್ನ ರಕ್ಷಣೆಯನ್ನು ಪ್ರೀತಿಮಾಡು ವವರು--ದೇವರು ಮಹಿಮೆಪಡಲಿ ಎಂದು ಯಾವಾ ಗಲೂ ಹೇಳಲಿ.ಆದರೆ ನಾನು ದೀನನೂ ಬಡವನೂ ಆಗಿದ್ದೇನೆ; ಓ ದೇವರೇ ನನಗೋಸ್ಕರ ತ್ವರೆಪಡು; ನನ್ನ ಸಹಾಯವೂ ನನ್ನನ್ನು ತಪ್ಪಿಸುವವನೂ ನೀನೇ. ಓ ಕರ್ತನೇ, ತಡ ಮಾಡಬೇಡ.
70:5b.PSA.070.005 ಆದರೆ ನಾನು ದೀನನೂ ಬಡವನೂ ಆಗಿದ್ದೇನೆ; ಓ ದೇವರೇ ನನಗೋಸ್ಕರ ತ್ವರೆಪಡು; ನನ್ನ ಸಹಾಯವೂ ನನ್ನನ್ನು ತಪ್ಪಿಸುವವನೂ ನೀನೇ. ಓ ಕರ್ತನೇ, ತಡ ಮಾಡಬೇಡ.
71
71:1b.PSA.071.001 ಓ ಕರ್ತನೇ, ನಾನು ನಿನ್ನಲ್ಲಿ ಭರವಸವನ್ನಿಟ್ಟಿದ್ದೇನೆ; ನನಗೆ ಎಂದಿಗೂ ಆಶಾ ಭಂಗವಾಗದಿರಲಿ.
71:2b.PSA.071.002 ನಿನ್ನ ನೀತಿಯಲ್ಲಿ ನನ್ನನ್ನು ಬಿಡಿಸಿ ನನ್ನನ್ನು ತಪ್ಪಿಸು; ನಿನ್ನ ಕಿವಿಯನ್ನು ನನ್ನ ಕಡೆಗೆ ತಿರುಗಿಸಿ ನನ್ನನ್ನು ರಕ್ಷಿಸು.
71:3b.PSA.071.003 ನೀನು ಯಾವಾಗಲೂ ನಾನು ಆಶ್ರಯಿಸಿಕೊಳ್ಳುವ ಬಲಸ್ಥಾನವಾಗಿರು. ನನ್ನನ್ನು ರಕ್ಷಿಸುವದಕ್ಕೆ ಆಜ್ಞಾಪಿಸಿದ್ದೀ, ನನ್ನ ಬಂಡೆಯೂ ಕೋಟೆಯೂ ನೀನೇ.
71:4b.PSA.071.004 ಓ ನನ್ನ ದೇವರೇ, ದುಷ್ಟನ ಕೈಗೂ ಅನ್ಯಾಯ ಮಾಡುವ ಕ್ರೂರನ ಕೈಗೂ ನನ್ನನ್ನು ತಪ್ಪಿಸು.
71:5b.PSA.071.005 ಓ ಕರ್ತನಾದ ದೇವರೇ, ನೀನು ನನ್ನ ನಿರೀಕ್ಷೆಯೂ ನನ್ನ ಯೌವನದಿಂದ ನನ್ನ ಭರವಸವೂ ಆಗಿದ್ದೀ.
71:6b.PSA.071.006 ಗರ್ಭದಿಂದಲೇ ನಿನ್ನ ಮೇಲೆ ಆತುಕೊಂಡಿದ್ದೇನೆ; ತಾಯಿಯ ಗರ್ಭದಿಂದ ನೀನು ನನ್ನನ್ನು ಹೊರಗೆ ತಂದಿದ್ದಿ. ಯಾವಾಗಲೂ ನಿನ್ನಲ್ಲಿ ನನ್ನ ಸ್ತೋತ್ರವು ಇರುವದು.
71:7b.PSA.071.007 ಅನೇಕರಿಗೆ ನಾನು ಆಶ್ಚರ್ಯದಂತಿದ್ದೇನೆ. ಆದರೆ ನೀನು ನನ್ನ ಬಲವಾದ ಆಶ್ರಯವಾಗಿದ್ದೀ.
71:8b.PSA.071.008 ನನ್ನ ಬಾಯಿ ನಿನ್ನ ಸ್ತೋತ್ರದಿಂದಲೂ ದಿನವೆಲ್ಲಾ ನಿನ್ನ ಗೌರವದಿಂದಲೂ ತುಂಬಿರಲಿ.
71:9b.PSA.071.009 ನನ್ನ ಮುಪ್ಪಿನ ಕಾಲದಲ್ಲಿ ನನ್ನನ್ನು ತಳ್ಳಿಬಿಡಬೇಡ. ನನ್ನ ಶಕ್ತಿಯು ಕುಂದಿಹೋಗುವಾಗ ನನ್ನನ್ನು ಕೈಬಿಡ ಬೇಡ.
71:10b.PSA.071.010 ನನ್ನ ಶತ್ರುಗಳು ನನಗೆ ವಿರೋಧವಾಗಿ ಮಾತನಾಡುತ್ತಾರೆ; ನನ್ನ ಪ್ರಾಣಕ್ಕೆ ಹೊಂಚು ಹಾಕುವ ವರು ಕೂಡಿಕೊಂಡು ಆಲೋಚನೆ ಮಾಡುತ್ತಾ--
71:11b.PSA.071.011 ದೇವರು ಅವನನ್ನು ಕೈ ಬಿಟ್ಟಿದ್ದಾನೆ; ಅವನನ್ನು ಹಿಂಸಿಸಿ, ಹಿಡಿದುಕೊಳ್ಳಿರಿ; ಅವನನ್ನು ಬಿಡಿಸುವವನು ಯಾರೂ ಇಲ್ಲ ಎಂದು ಅವರು ಅನ್ನುತ್ತಾರೆ.
71:12b.PSA.071.012 ಓ ದೇವರೇ, ನನ್ನಿಂದ ದೂರವಾಗಿರ ಬೇಡ. ಓ ದೇವರೇ, ನನ್ನ ಸಹಾಯಕ್ಕೆ ತ್ವರೆಪಡು.
71:13b.PSA.071.013 ನನ್ನ ಪ್ರಾಣವನ್ನು ಎದುರಿಸುವವರು ನಾಚಿಕೆಪಟ್ಟು ನಾಶವಾಗಲಿ; ನಿಂದೆಯೂ ಅವಮಾನವೂ ನನ್ನ ಕೇಡಿಗಾಗಿ ಹುಡುಕು ವವರನ್ನು ಸುತ್ತಿಕೊಳ್ಳಲಿ.
71:14b.PSA.071.014 ಆದರೆ ನಾನು ಬಿಟ್ಟುಬಿಡದೆ ನಿನ್ನನ್ನು ನಿರೀಕ್ಷಿ ಸುತ್ತಾ ನಿನ್ನನ್ನು ಇನ್ನೂ ಹೆಚ್ಚೆಚ್ಚಾಗಿ ಸುತ್ತಿಸುವೆನು.
71:15b.PSA.071.015 ನನ್ನ ಬಾಯಿ ದಿನವೆಲ್ಲಾ ನಿನ್ನ ನೀತಿಯನ್ನೂ ರಕ್ಷಣೆ ಯನ್ನೂ ಪ್ರಕಟಿಸುವದು. ಅವುಗಳ ಸಂಖ್ಯೆಗಳು ನನಗೆ ತಿಳಿಯದು.
71:16b.PSA.071.016 ಕರ್ತನಾದ ದೇವರ ಶಕ್ತಿಯಲ್ಲಿ ನಾನು ಹೋಗುವೆನು, ನಿನ್ನ ನೀತಿಯನ್ನು ಹೌದು, ನಿನ್ನದನ್ನೇ ತಿಳಿಸುವೆನು.
71:17b.PSA.071.017 ಓ ದೇವರೇ, ನನ್ನ ಯೌವನದಿಂದ ನನಗೆ ನೀನು ಕಲಿಸಿದ್ದೀ; ಈ ವರೆಗೂ ನಿನ್ನ ಅದ್ಭುತ ಕಾರ್ಯಗಳನ್ನು ತಿಳಿಸುವೆನು.
71:18b.PSA.071.018 ಓ ದೇವರೇ, ನಾನು ಮುಪ್ಪಿನವನೂ ನರೆ ಕೂದಲಿನವನೂ ಆದಾಗ ಈ ಸಂತತಿಯವರಿಗೆ ನಿನ್ನ ಶಕ್ತಿಯನ್ನೂ ಮುಂದೆ ಬರುವ ಪ್ರತಿಯೊಬ್ಬನಿಗೆ ನಿನ್ನ ಅಧಿಕಾರವನ್ನೂ ತಿಳಿಸುವ ವರೆಗೂ ನನ್ನನ್ನು ಕೈಬಿಡಬೇಡ.
71:19b.PSA.071.019 ಓ ದೇವರೇ, ಮಹತ್ಕಾರ್ಯಗಳನ್ನು ಮಾಡಿದ ನಿನ್ನ ನೀತಿಯು ಬಹಳ ಉನ್ನತವಾಗಿದೆ. ಓ ದೇವರೇ, ನಿನ್ನ ಹಾಗೆ ಯಾರಿದ್ದಾರೆ!
71:20b.PSA.071.020 ಕಠಿಣವಾದ ಇಕ್ಕಟ್ಟುಗಳನ್ನು ನೋಡಮಾಡಿದ ನನ್ನನ್ನು ನೀನು ತಿರಿಗಿ ಬದುಕಿಸಿದಿ; ಭೂಮಿಯ ಆಗಾಧ ಗಳೊಳಗಿಂದ ನನ್ನನ್ನು ಮೇಲಕ್ಕೆ ತರುತ್ತೀ.
71:21b.PSA.071.021 ನೀನು ನನ್ನ ಗೌರವವನ್ನು ಹೆಚ್ಚಿಸಿ ಎಲ್ಲಾ ಕಡೆಯಿಂದಲೂ ನನ್ನನ್ನು ಆದರಿಸುವಿ.
71:22b.PSA.071.022 ಓ ನನ್ನ ದೇವರೇ, ನಾನು ಸಹ ನಿನ್ನನ್ನೂ ನಿನ್ನ ಸತ್ಯವನ್ನೂ ವೀಣೆಯಿಂದ ಕೊಂಡಾಡುವೆನು; ಓ ಇಸ್ರಾಯೇಲಿನ ಪರಿಶುದ್ದನೇ, ಕಿನ್ನರಿಯಿಂದ ನಿನ್ನನ್ನು ಕೀರ್ತಿಸುವೆನು.
71:23b.PSA.071.023 ನಾನು ನಿನ್ನನ್ನು ಕೀರ್ತಿಸುವಾಗ ನನ್ನ ತುಟಿಗಳೂ ನೀನು ವಿಮೋಚಿಸಿದ ನನ್ನ ಪ್ರಾಣವೂ ಉತ್ಸಾಹ ಧ್ವನಿಗೈಯುವವು.ನನ್ನ ನಾಲಿಗೆಯು ಸಹ ದಿನವೆಲ್ಲಾ ನಿನ್ನ ನೀತಿಯನ್ನು ಮಾತನಾಡುವದು; ನನಗೆ ಕೇಡನ್ನು ಹುಡುಕುವವರು ನಾಚಿಕೊಂಡು ಲಜ್ಜೆಪಡುತ್ತಾರೆ.
71:24b.PSA.071.024 ನನ್ನ ನಾಲಿಗೆಯು ಸಹ ದಿನವೆಲ್ಲಾ ನಿನ್ನ ನೀತಿಯನ್ನು ಮಾತನಾಡುವದು; ನನಗೆ ಕೇಡನ್ನು ಹುಡುಕುವವರು ನಾಚಿಕೊಂಡು ಲಜ್ಜೆಪಡುತ್ತಾರೆ.
72
72:1b.PSA.072.001 ಓ ದೇವರೇ, ನಿನ್ನ ನ್ಯಾಯತೀರ್ಪುಗಳನ್ನು ಅರಸನಿಗೂ ನೀತಿಯನ್ನು ಅರಸನ ಮಗನಿಗೂ ಕೊಡು.
72:2b.PSA.072.002 ನಿನ್ನ ಜನರಿಗೆ ನೀತಿಯಿಂದಲೂ ದೀನರಿಗೆ ನ್ಯಾಯದಿಂದಲೂ ಆತನು ತೀರ್ಪು ಮಾಡು ವನು.
72:3b.PSA.072.003 ಬೆಟ್ಟಗಳೂ ಚಿಕ್ಕ ಗುಡ್ಡಗಳೂ ನೀತಿಯಿಂದ ಸಮಾಧಾನವನ್ನು ಜನರಿಗೆ ತರುವವು.
72:4b.PSA.072.004 ಆತನು ಜನರಲ್ಲಿ ದೀನರಿಗೆ ನ್ಯಾಯತೀರಿಸುವನು; ಬಡವನ ಮಕ್ಕಳನ್ನು ರಕ್ಷಿಸುವನು; ಬಲಾತ್ಕಾರಿಯನ್ನು ಮುರಿದು ತುಂಡು ಮಾಡುವನು.
72:5b.PSA.072.005 ಸೂರ್ಯನೂ ಚಂದ್ರನೂ ಇರುವ ವರೆಗೆ ತಲ ತಲಾಂತರಗಳು ನಿನಗೆ ಭಯಪಡುವರು.
72:6b.PSA.072.006 ಕೊಯ್ದ ಹುಲ್ಲಿನ ಮೇಲೆ ಬೀಳುವ ಮಳೆಯ ಹಾಗೆಯೂ ಭೂಮಿಯನ್ನು ನೆನಸುವ ಸುರಿಯುವ ಮಳೆಗಳ ಹಾಗೆಯೂ ಆತನು ಇಳಿದು ಬರುವನು.
72:7b.PSA.072.007 ಆತನ ದಿವಸಗಳಲ್ಲಿ ನೀತಿವಂತನು ವೃದ್ಧಿಯಾಗುವನು. ಸಮೃದ್ಧಿ ಯಾದ ಸಮಾಧಾನವು ಚಂದ್ರನು ಇರುವ ವರೆಗೂ ಇರುವದು.
72:8b.PSA.072.008 ಸಮುದ್ರದಿಂದ ಸಮುದ್ರದ ವರೆಗೂ ನದಿಯಿಂದ ಭೂಮಿಯ ಕೊನೆಗಳವರೆಗೂ ಆತನು ಆಳುವನು.
72:9b.PSA.072.009 ಆತನ ಮುಂದೆ ಅರಣ್ಯ ನಿವಾಸಿಗಳು ಎರಗುವರು; ಆತನ ಶತ್ರುಗಳು ಧೂಳನ್ನು ನೆಕ್ಕುವರು.
72:10b.PSA.072.010 ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ತರುವರು; ಶೆಬಾ ಮತ್ತು ಸೆಬಾದ ಅರಸರು ದಾನಗಳನ್ನು ಅರ್ಪಿಸುವರು.
72:11b.PSA.072.011 ಹೌದು, ಎಲ್ಲಾ ಅರಸರು ಆತನ ಮುಂದೆ ಅಡ್ಡ ಬೀಳುವರು; ಎಲ್ಲಾ ಜನಾಂಗಗಳು ಆತನನ್ನು ಸೇವಿಸುವವು.
72:12b.PSA.072.012 ಆತನಿಗೆ ಮೊರೆ ಇಡುವ ಬಡವರನ್ನೂ ಸಹಾಯ ಕನಿಲ್ಲದ ದೀನನನ್ನೂ ಬಿಡಿಸುವನು.
72:13b.PSA.072.013 ದರಿದ್ರನನ್ನೂ ಬಡವನನ್ನೂ ಕರುಣಿಸುವನು; ಬಡವರ ಪ್ರಾಣಗ ಳನ್ನು ರಕ್ಷಿಸುವನು.
72:14b.PSA.072.014 ಮೋಸದಿಂದಲೂ ಬಲಾತ್ಕಾರ ದಿಂದಲೂ ಅವರ ಪ್ರಾಣವನ್ನು ಬಿಡುಗಡೆ ಮಾಡು ವನು; ಅವರ ರಕ್ತವು ಆತನ ದೃಷ್ಟಿಯಲ್ಲಿ ಅಮೂಲ್ಯ ವಾಗಿರುವದು.
72:15b.PSA.072.015 ಅವನು ಬಾಳುವನು; ಅವನಿಗೆ ಶೆಬಾದ ಚಿನ್ನ ವನ್ನು ಕೊಡುವರು; ಅವನಿಗೋಸ್ಕರ ಯಾವಾಗಲೂ ಪ್ರಾರ್ಥನೆ ಮಾಡುವರು; ಪ್ರತಿದಿನ ಅವನನ್ನು ಕೊಂಡಾಡುವರು.
72:16b.PSA.072.016 ಧಾನ್ಯದ ಸಮೃದ್ಧಿಯು ದೇಶದಲ್ಲಿ ಬೆಟ್ಟಗಳ ತುದಿಯ ಮೇಲೆ ಇರುವದು; ಅದರ ಫಲವು ಲೆಬನೋನಿನ ಹಾಗೆ ಕದಲುವದು. ಪಟ್ಟಣದ ವರು ಭೂಮಿಯ ಸೊಪ್ಪಿನ ಹಾಗೆ ವೃದ್ಧಿಯಾಗುವರು.
72:17b.PSA.072.017 ಆತನ ನಾಮವು ಎಂದೆಂದಿಗೂ ಇರುವದು; ಸೂರ್ಯನು ಇರುವವರೆಗೂ ಆತನ ಹೆಸರು ಇರು ವದು. ಮನುಷ್ಯರು ಆತನಲ್ಲಿ ಆಶೀರ್ವಾದ ಹೊಂದು ವರು. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತ ನೆಂದು ಕರೆಯುವರು.
72:18b.PSA.072.018 ಒಬ್ಬನೇ ಅದ್ಭುತಗಳನ್ನು ಮಾಡುವ ಇಸ್ರಾಯೇಲಿನ ದೇವರಾಗಿರುವ ಕರ್ತನಾದ ದೇವರಿಗೆ ಸ್ತೋತ್ರವಾಗಲಿ.
72:19b.PSA.072.019 ಆತನ ಮಹಿಮೆಯುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ; ಆತನ ಮಹಿ ಮೆಯು ಭೂಮಿಯನ್ನೆಲ್ಲಾ ತುಂಬಲಿ. ಆಮೆನ್. ಆಮೆನ್.ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಮುಗಿದವೆ.
72:20b.PSA.072.020 ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಮುಗಿದವೆ.
73
73:1b.PSA.073.001 ನಿಜವಾಗಿ ದೇವರು ಇಸ್ರಾಯೇಲಿಗೂ ಶುದ್ಧ ಹೃದಯದವರಿಗೂ ಒಳ್ಳೆಯವನು.
73:2b.PSA.073.002 ನನ್ನ ಪಾದಗಳ ಮಟ್ಟಿಗಾದರೋ ಅವು ತಪ್ಪುವ ಹಾಗಿದ್ದವು, ನನ್ನ ಹೆಜ್ಜೆಗಳು ಜಾರುವದಕ್ಕೆ ಬಹು ಸವಿಾಪವಾಗಿದ್ದವು.
73:3b.PSA.073.003 ದುಷ್ಟರ ಅಭಿವೃದ್ಧಿಯನ್ನು ನೋಡಿದಾಗ ಮೂರ್ಖರ ಮೇಲೆ ಹೊಟ್ಟೇಕಿಚ್ಚು ಪಟ್ಟೆನು.
73:4b.PSA.073.004 ಅವರ ಮರಣಕ್ಕೆ ಬಂಧನಗಳು ಇಲ್ಲ; ಅವರ ತ್ರಾಣವು ಸ್ಥಿರವಾಗಿದೆ.
73:5b.PSA.073.005 ಬೇರೆ ಮನುಷ್ಯರಂತೆ ಅವರು ಕಷ್ಟದಲ್ಲಿಲ್ಲ. ಇಲ್ಲವೆ ಬೇರೆ ಮನುಷ್ಯರ ಹಾಗೆ ಅವರಿಗೆ ವ್ಯಾಧಿಯೂ ಇಲ್ಲ;
73:6b.PSA.073.006 ಆದದರಿಂದ ಗರ್ವವು ಅವರಿಗೆ ಕಂಠಮಾಲೆಯಂತೆ ಅವರನ್ನು ಸುತ್ತಿದೆ, ಬಲಾತ್ಕಾರವು ಅವರನ್ನು ಬಟ್ಟೆಯ ಹಾಗೆ ಮುಚ್ಚುತ್ತದೆ.
73:7b.PSA.073.007 ಅವರ ಕಣ್ಣುಗಳು ಕೊಬ್ಬಿನಿಂದ ಉಬ್ಬಿಕೊಂಡಿರುತ್ತವೆ; ಅವರ ಹೃದಯವು ಆಶಿಸುವದಕ್ಕಿಂತಲೂ ಹೆಚ್ಚಾಗಿ ಅವರಿಗೆ ಇವೆ.
73:8b.PSA.073.008 ಅವರು ಕೆಟ್ಟುಹೋದವರು. ಸಂಕಟ ಪಡುವವರ ವಿಷಯ ಕೆಟ್ಟದ್ದಾಗಿಯೂ ಗರ್ವದಿಂದಲೂ ಮಾತನಾಡುತ್ತಾರೆ.
73:9b.PSA.073.009 ಪರಲೋಕಕ್ಕೆ ವಿರೋಧವಾಗಿ ತಮ್ಮ ಬಾಯನ್ನು ತೆರೆದಿದ್ದಾರೆ; ಭೂಲೋಕದಲ್ಲೆಲ್ಲಾ ಅವರ ಮಾತೇ ನಡೆಯುವದು.
73:10b.PSA.073.010 ಆದದರಿಂದ ಅವನ ಜನರು ಇಲ್ಲಿಗೆ ತಿರುಗಿ ಕೊಳ್ಳುತ್ತಾರೆ; ಅವರಿಗೆ ಪಾನವು ಯಥೇಚ್ಚವಾಗಿ ದೊರೆಯುತ್ತದೆ.
73:11b.PSA.073.011 ಅವರು-- ದೇವರು ಹೇಗೆ ಬಲ್ಲನು? ಮಹೋನ್ನತನಲ್ಲಿ ತಿಳುವಳಿಕೆ ಉಂಟೋ ಎಂದು ಅಂದುಕೊಳ್ಳುತ್ತಾರೆ.
73:12b.PSA.073.012 ಇಗೋ, ಇಹಲೋಕದಲ್ಲಿ ವೃದ್ಧಿಯಾಗುವ ದುಷ್ಟರು ಇವರೇ, ಐಶ್ವರ್ಯದಲ್ಲಿ ಇವರು ಹೆಚ್ಚುತ್ತಾರೆ.
73:13b.PSA.073.013 ನಿಶ್ಚಯವಾಗಿ ನನ್ನ ಹೃದಯವನ್ನು ವ್ಯರ್ಥವಾಗಿ ನಿರ್ಮಲ ಮಾಡಿಕೊಂಡು ನನ್ನ ಕೈಗಳನ್ನು ನಿರಪರಾಧ ದಲ್ಲಿ ತೊಳೆದಿದ್ದೇನೆ.
73:14b.PSA.073.014 ನಾನು ದಿನವೆಲ್ಲಾ ವ್ಯಾಧಿ ಪೀಡಿತನಾಗಿದ್ದೇನೆ; ಪ್ರತಿ ಉದಯದಲ್ಲಿ ನನಗೆ ಶಿಕ್ಷೆ ಯಾಯಿತು.
73:15b.PSA.073.015 ಹೀಗೆ ನಾನು ಮಾತನಾಡುವೆನೆಂದು ಹೇಳಿದರೆ, ಇಗೋ, ನಿನ್ನ ಮಕ್ಕಳ ವಂಶಕ್ಕೆ ವಿರೋಧ ವಾಗಿ ಆತಂಕ ಮಾಡುವೆನು.
73:16b.PSA.073.016 ಇದನ್ನು ತಿಳಿಯು ವದಕ್ಕೆ ನಾನು ಯೋಚಿಸಿದಾಗ, ನಾನು ದೇವರ ಪರಿಶುದ್ಧ ಸ್ಥಳಗಳಿಗೆ ಬರುವ ವರೆಗೆ
73:17b.PSA.073.017 ಅದು ನನ್ನ ದೃಷ್ಟಿಗೆ ಕಷ್ಟವಾಗಿತ್ತು. ಅವರ ಅಂತ್ಯವನ್ನು ಗ್ರಹಿಸಿ ಕೊಂಡೆನು.
73:18b.PSA.073.018 ನಿಶ್ಚಯವಾಗಿ ನೀನು ಅವರನ್ನು ಜಾರುವ ಸ್ಥಳಗಳಲ್ಲಿ ಇಟ್ಟಿದ್ದೀ; ಅವರನ್ನು ನಾಶನಕ್ಕೆ ಕೆಳಗೆ ದೊಬ್ಬಿದ್ದೀ.
73:19b.PSA.073.019 ಕ್ಷಣಮಾತ್ರದಲ್ಲಿ ಹೀಗೆ ನಾಶನಕ್ಕೆ ಅವರನ್ನು ಬರಮಾಡಿದಿ. ಅವರು ದಿಗಿಲುಗಳಿಂದ ಸಂಪೂರ್ಣವಾಗಿ ನಾಶವಾಗಿದ್ದಾರೆ.
73:20b.PSA.073.020 ಎಚ್ಚತ್ತ ಮೇಲೆ ಕನಸು ಹೇಗೋ ಹಾಗೆಯೇ ಓ ಕರ್ತನೇ, ನೀನು ಎಚ್ಚರವಾದಾಗ ಅವರ ರೂಪವನ್ನು ತಿರಸ್ಕರಿಸುವಿ.
73:21b.PSA.073.021 ಹೀಗೆ ನನ್ನ ಹೃದಯವು ವ್ಯಥೆಗೊಂಡಾಗ ನನ್ನ ಅಂತರಿಂದ್ರಿಯಗಳಿಗೆ ತಿವಿಯಲ್ಪಟ್ಟವು.
73:22b.PSA.073.022 ಆಗ ನಾನು ಮೂರ್ಖನಾಗಿ ಏನೂ ತಿಳಿಯದೆ ನಿನ್ನ ಮುಂದೆ ಪಶು ವಿನಂತೆ ಇದ್ದೆನು.
73:23b.PSA.073.023 ಆದಾಗ್ಯೂ ನಾನು ನಿನ್ನ ಸಂಗಡ ಯಾವಾಗಲೂ ಇದ್ದೇನೆ; ನೀನು ನನ್ನ ಬಲಗೈಯನ್ನು ಹಿಡಿದಿದ್ದೀ.
73:24b.PSA.073.024 ನಿನ್ನ ಆಲೋಚನೆಯಂತೆ ನನ್ನನ್ನು ನಡಿಸಿದ ತರು ವಾಯ ಮಹಿಮೆಗೆ ನನ್ನನ್ನು ಅಂಗೀಕರಿಸುವಿ.
73:25b.PSA.073.025 ಪರ ಲೋಕದಲ್ಲಿ ನನಗೆ ನೀನಲ್ಲದೆ ಮತ್ತಾರಿದ್ದಾರೆ? ನಿನ್ನ ಹೊರತಾಗಿ ಭೂಮಿಯಲ್ಲಿ ನಾನು ಅಪೇಕ್ಷಿಸುವವರು ಯಾರೂ ಇಲ್ಲ.
73:26b.PSA.073.026 ನನ್ನ ಮಾಂಸವೂ ಹೃದಯವೂ ಕುಂದುತ್ತದೆ; ಆದರೆ ದೇವರು ಯುಗಯುಗಕ್ಕೂ ನನ್ನ ಹೃದಯದ ಬಲವೂ ಪಾಲೂ ಆಗಿದ್ದಾನೆ.
73:27b.PSA.073.027 ಇಗೋ, ನಿನಗೆ ದೂರವಾಗಿರುವವರು ನಾಶವಾಗುವರು, ನಿನ್ನನ್ನು ಬಿಟ್ಟು ಜಾರತ್ವ ಮಾಡುವವರೆಲ್ಲ ರನ್ನು ಸಂಹರಿಸಿದ್ದೀ.ನನಗಾದರೋ ದೇವರ ಸವಿಾಪಕ್ಕೆ ಬರುವದೇ ಒಳ್ಳೇದಾಗಿದೆ; ನಿನ್ನ ಕ್ರಿಯೆ ಗಳನ್ನೆಲ್ಲಾ ಸಾರುವದಕ್ಕೆ ಕರ್ತನಾದ ದೇವರಲ್ಲಿ ನನ್ನ ಭರವಸವನ್ನು ಇಟ್ಟಿದ್ದೇನೆ.
73:28b.PSA.073.028 ನನಗಾದರೋ ದೇವರ ಸವಿಾಪಕ್ಕೆ ಬರುವದೇ ಒಳ್ಳೇದಾಗಿದೆ; ನಿನ್ನ ಕ್ರಿಯೆ ಗಳನ್ನೆಲ್ಲಾ ಸಾರುವದಕ್ಕೆ ಕರ್ತನಾದ ದೇವರಲ್ಲಿ ನನ್ನ ಭರವಸವನ್ನು ಇಟ್ಟಿದ್ದೇನೆ.
74
74:1b.PSA.074.001 ಓ ದೇವರೇ, ಸದಾಕಾಲಕ್ಕೆ ತಳ್ಳಿಬಿಟ್ಟದ್ದೇಕೆ? ನಿನ್ನ ಮೇವಿನ ಕುರಿಮಂದೆಗೆ ವಿರೋಧವಾಗಿ ನಿನ್ನ ಕೋಪವು ಹೊಗೆಯಾಡುವದು ಯಾಕೆ?
74:2b.PSA.074.002 ಪೂರ್ವದಲ್ಲಿ ನೀನು ಕೊಂಡುಕೊಂಡ ಸಭೆಯನ್ನೂ ವಿಮೋಚಿಸಿದ ಬಾಧ್ಯತೆಯ ಕೋಲನ್ನೂ ನೀನು ವಾಸಮಾಡಿದ ಈ ಚೀಯೋನ್ ಪರ್ವತವನ್ನೂ ಜ್ಞಾಪಕಮಾಡಿಕೋ.
74:3b.PSA.074.003 ನಿನ್ನ ಪಾದಗಳನ್ನು ಸದಾಕಾಲದ ನಾಶನಗಳಿಗೆ, ಅಂದರೆ ಶತ್ರುವು ಪರಿಶುದ್ಧ ಸ್ಥಳದಲ್ಲಿ ಎಲ್ಲವನ್ನು ಕೆಟ್ಟತನದಿಂದ ಮಾಡಿದ್ದಕ್ಕೆ ತಿರುಗಿಸು.
74:4b.PSA.074.004 ನಿನ್ನ ವೈರಿಗಳು ನಿನ್ನ ಸಭೆಗಳ ಮಧ್ಯದಲ್ಲಿ ಗರ್ಜಿಸುತ್ತಾರೆ; ತಮ್ಮ ಧ್ವಜಗಳನ್ನು ಗುರುತುಗಳಾಗಿ ಇಟ್ಟಿದ್ದಾರೆ.
74:5b.PSA.074.005 ದಟ್ಟವಾದ ಮರಗಳಲ್ಲಿ ಕೊಡಲಿ ಎತ್ತುವವನ ಹಾಗೆ ಮನುಷ್ಯನು ಪ್ರಸಿದ್ಧನಾಗಿದ್ದಾನೆ;
74:6b.PSA.074.006 ಆದರೆ ಈಗ ಕೆತ್ತನೆ ಕೆಲಸವನ್ನು ತಕ್ಷಣ ಕೊಡಲಿಯಿಂದಲೂ ಸುತ್ತಿಗೆ ಯಿಂದಲೂ ಅವರು ಹೊಡೆದು ಬಿಡುತ್ತಾರೆ.
74:7b.PSA.074.007 ನಿನ್ನ ಪರಿಶುದ್ಧ ಆಲಯದಲ್ಲಿ ಬೆಂಕಿ ಹಚ್ಚುತ್ತಾರೆ; ನಿನ್ನ ಹೆಸರಿನ ನಿವಾಸವನ್ನು ಭೂಮಿಗೆ ಕೆಡವಿ ಹೊಲೆ ಮಾಡುತ್ತಾರೆ.
74:8b.PSA.074.008 ಅವುಗಳನ್ನು ಒಟ್ಟಾಗಿ ಕೆಡವಿ ಬಿಡೋಣ ಎಂದು ತಮ್ಮ ಹೃದಯದಲ್ಲಿ ಹೇಳಿಕೊಳ್ಳುತ್ತಾರೆ; ದೇಶದಲ್ಲಿರುವ ದೇವರ ಸಭಾಸ್ಥಾನಗಳನ್ನೆಲ್ಲಾ ಸುಟ್ಟುಬಿಡು ತ್ತಾರೆ.
74:9b.PSA.074.009 ನಮ್ಮ ಗುರುತುಗಳನ್ನು ನೋಡದೆ ಇದ್ದೇವೆ; ಇನ್ನು ಮೇಲೆ ಯಾವ ಪ್ರವಾದಿಯೂ ಇರುವದಿಲ್ಲ ಇಲ್ಲವೆ ಇದು ಎಷ್ಟರವರೆಗೆ ಎಂದು ತಿಳಿದವನು ನಮ್ಮಲ್ಲಿ ಯಾರೂ ಇಲ್ಲ.
74:10b.PSA.074.010 ಓ ದೇವರೇ, ವೈರಿಯು ನಿಂದಿಸುವದು ಎಷ್ಟರ ವರೆಗೆ? ಶತ್ರುವು ನಿನ್ನ ಹೆಸರನ್ನು ಎಂದೆಂದಿಗೂ ದೂಷಿ ಸುವನೋ?
74:11b.PSA.074.011 ಯಾಕೆ ನಿನ್ನ ಕೈಯನ್ನು, ನಿನ್ನ ಬಲಗೈ ಯನ್ನು ಸಹ ಹಿಂದೆಳಿಯುತ್ತೀ? ನಿನ್ನ ಎದೆಯೊಳಗಿಂದ ಅದನ್ನು ಹೊರತೆಗೆ.
74:12b.PSA.074.012 ದೇವರು ಪೂರ್ವದಿಂದಲೂ ನನ್ನ ಅರಸನೂ ಭೂಮಿಯ ಮಧ್ಯದಲ್ಲಿ ರಕ್ಷಣೆಯನ್ನು ಮಾಡುವಾತನೂ ಆಗಿದ್ದಾನೆ.
74:13b.PSA.074.013 ನೀನು ನಿನ್ನ ಬಲದಿಂದ ಸಮುದ್ರವನ್ನು ಭೇದಿಸಿದಿ; ತಿಮಿಂಗಿಲಗಳ ತಲೆಗಳನ್ನು ನೀರುಗಳಲ್ಲಿ ಜಜ್ಜಿಬಿಟ್ಟಿ.
74:14b.PSA.074.014 ನೀನು ಲಿವ್ಯಾತಾನದ ತಲೆ ಗಳನ್ನು ಒಡೆದು ತುಂಡು ತುಂಡುಮಾಡಿದಿ. ಅದನ್ನು ಅರಣ್ಯದ ಜನರಿಗೆ ಆಹಾರವಾಗಿ ಕೊಟ್ಟಿ.
74:15b.PSA.074.015 ನೀನು ಬುಗ್ಗೆಯನ್ನೂ ಪ್ರವಾಹವನ್ನೂ ವಿಭಾಗಮಾಡಿದಿ; ಮಹಾ ನದಿಗಳನ್ನು ಒಣಗಿಸಿದಿ.
74:16b.PSA.074.016 ಹಗಲು ನಿನ್ನದು; ರಾತ್ರಿಯು ಸಹ ನಿನ್ನದು; ನೀನು ಬೆಳಕನ್ನೂ ಸೂರ್ಯ ನನ್ನೂ ಸಿದ್ಧಮಾಡಿದ್ದೀ.
74:17b.PSA.074.017 ನೀನು ಭೂಮಿಯ ಮೇರೆ ಗಳನ್ನೆಲ್ಲಾ ನಿರ್ಣಯಿಸಿದ್ದೀ; ಬೇಸಿಗೆ ಮತ್ತು ಚಳಿ ಗಾಲವನ್ನು ನಿರ್ಮಿಸಿದ್ದೀ.
74:18b.PSA.074.018 ಓ ಕರ್ತನೇ, ವೈರಿಯು ನಿಂದಿಸಿ ಮೂರ್ಖರು ನಿನ್ನ ನಾಮವನ್ನು ದೂಷಿಸಿದ್ದನ್ನು ಜ್ಞಾಪಿಸಿಕೋ.
74:19b.PSA.074.019 ನಿನ್ನ ಬೆಳವಕ್ಕಿಯ ಪ್ರಾಣವನ್ನು ದುಷ್ಟರ ಸಮೂ ಹಕ್ಕೆ ಒಪ್ಪಿಸ ಬೇಡ; ನಿನ್ನ ದೀನರ ಸಭೆಯನ್ನು ಸದಾ ಕಾಲಕ್ಕೆ ಮರೆತುಬಿಡಬೇಡ.
74:20b.PSA.074.020 ಒಡಂಬಡಿಕೆಗೆ ಗೌರ ವವನ್ನು ಕೊಡು; ಭೂಮಿಯ ಕತ್ತಲಿನ ಸ್ಥಳಗಳು ಕ್ರೂರತನದ ನಿವಾಸಗಳಿಂದ ತುಂಬಿಯವೆ.
74:21b.PSA.074.021 ಕುಗ್ಗಿ ದವನು ಅವಮಾನಕ್ಕೆ ತಿರಿಗಿಕೊಳ್ಳದೆ ಇರಲಿ; ದೀನನೂ ಬಡವನೂ ನಿನ್ನ ಹೆಸರನ್ನು ಸ್ತುತಿಸಲಿ.
74:22b.PSA.074.022 ಓ ದೇವರೇ, ಏಳು; ನಿನ್ನ ಸ್ವಂತ ವ್ಯಾಜ್ಯವನ್ನು ವಿವಾದಿಸು; ದಿನವೆಲ್ಲಾ ಮೂರ್ಖನು ನಿನ್ನನ್ನು ಹೇಗೆ ನಿಂದಿಸುತ್ತಾನೆಂದು ಜ್ಞಾಪ ಕಮಾಡಿಕೋ.ನಿನ್ನ ವೈರಿಗಳ ಸ್ವರವನ್ನು ಮರೆತು ಬಿಡಬೇಡ; ನಿನ್ನ ವಿರೋಧಿಗಳ ಘೋಷವು ಯಾವಾ ಗಲೂ ಏಳುತ್ತದೆ.
74:23b.PSA.074.023 ನಿನ್ನ ವೈರಿಗಳ ಸ್ವರವನ್ನು ಮರೆತು ಬಿಡಬೇಡ; ನಿನ್ನ ವಿರೋಧಿಗಳ ಘೋಷವು ಯಾವಾ ಗಲೂ ಏಳುತ್ತದೆ.
75
75:1b.PSA.075.001 ನಿನ್ನನ್ನು ಕೊಂಡಾಡುತ್ತೇವೆ; ಓ ದೇವರೇ, ನಿನ್ನನ್ನು ಕೊಂಡಾಡುತ್ತೇವೆ; ಪ್ರಕಟ ವಾಗುವ ನಿನ್ನ ಅದ್ಭುತ ಕಾರ್ಯಗಳಿಗೆ ನಿನ್ನ ನಾಮವು ಸವಿಾಪವಾಗಿದೆ.
75:2b.PSA.075.002 ನಾನು ಸಭೆಯನ್ನು ಅಂಗೀಕರಿಸು ವಾಗ ಸರಿಯಾಗಿ ನ್ಯಾಯತೀರಿಸುವೆನು;
75:3b.PSA.075.003 ಭೂಮಿಯೂ ಅದರ ನಿವಾಸಿಗಳೆಲ್ಲರೂ ಕರಗಿದ್ದಾರೆ; ನಾನು ಅದರ ಸ್ಥಂಭಗಳನ್ನು ನಿಲ್ಲಿಸುತ್ತೇನೆ ಸೆಲಾ.
75:4b.PSA.075.004 ಮೂರ್ಖತನದಿಂದ ವರ್ತಿಸಬೇಡಿರಿ ಎಂದು ಮೂರ್ಖರಿಗೆ ಹೇಳುತ್ತೇನೆ. ಕೊಂಬು ಎತ್ತಬೇಡಿರಿ ಎಂದು ದುಷ್ಟರಿಗೆ ಹೇಳಿದೆನು.
75:5b.PSA.075.005 ನಿಮ್ಮ ಕೊಂಬನ್ನು ಉನ್ನತಕ್ಕೆ ಎತ್ತಬೇಡಿರಿ; ಬೊಗ್ಗದ ಕುತ್ತಿಗೆಯಿಂದ ಮಾತಾಡಬೇಡಿರಿ.
75:6b.PSA.075.006 ಉದ್ಧಾರವು ಮೂಡಣದಿಂದಲೂ ಪಡುವಣದಿಂದಲೂ ಅಲ್ಲ; ಇಲ್ಲವೆ ದಕ್ಷಿಣದಿಂದಲೂ ಬರುವದಿಲ್ಲ.
75:7b.PSA.075.007 ಆದರೆ ದೇವರು ನ್ಯಾಯತೀರಿಸುವಾ ತನಾಗಿದ್ದಾನೆ; ಒಬ್ಬನನ್ನು ತಗ್ಗಿಸುತ್ತಾನೆ; ಇನ್ನೊಬ್ಬನನ್ನು ಎತ್ತುತ್ತಾನೆ.
75:8b.PSA.075.008 ಕರ್ತನ ಕೈಯಲ್ಲಿ ಪಾತ್ರೆಯು ಉಂಟು; ದ್ರಾಕ್ಷಾರಸವು ಕೆಂಪಾಗಿದೆ. ಕಲಬೆರಿಕೆಯಿಂದ ತುಂಬಿ ಅದೆ; ಅದರಿಂದ ಆತನು ಹೊಯ್ಯುತ್ತಾನೆ; ಅದರ ಮಡ್ಡಿಯನ್ನು ಭೂಮಿಯ ದುಷ್ಟರೆಲ್ಲರೂ ಹೀರಿಕೊಂಡು ಕುಡಿಯುವರು.
75:9b.PSA.075.009 ಆದರೆ ನಾನು ಎಂದೆಂದಿಗೂ ಪ್ರಕಟಿಸುವೆನು, ಯಾಕೋಬನ ದೇವರ ಸ್ತುತಿಗಳನ್ನು ಹಾಡುವೆನು;ದುಷ್ಟರ ಕೊಂಬುಗಳನ್ನೆಲ್ಲಾ ಕಡಿದುಬಿಡುವೆನು; ಆದರೆ ನೀತಿವಂತರ ಕೊಂಬುಗಳು ಎತ್ತಲ್ಪಡುವವು.
75:10b.PSA.075.010 ದುಷ್ಟರ ಕೊಂಬುಗಳನ್ನೆಲ್ಲಾ ಕಡಿದುಬಿಡುವೆನು; ಆದರೆ ನೀತಿವಂತರ ಕೊಂಬುಗಳು ಎತ್ತಲ್ಪಡುವವು.
76
76:1b.PSA.076.001 ದೇವರು ಯೆಹೂದದಲ್ಲಿ ಪ್ರಸಿದ್ಧವಾಗಿದ್ದಾನೆ; ಇಸ್ರಾಯೇಲಿನಲ್ಲಿ ಆತನ ಹೆಸರು ದೊಡ್ಡದಾಗಿದೆ.
76:2b.PSA.076.002 ಸಾಲೇಮಿನಲ್ಲಿ ಆತನ ಗುಡಾರವೂ ಚೀಯೋನಿನಲ್ಲಿ ಆತನ ವಾಸಸ್ಥಾನವೂ ಉಂಟು.
76:3b.PSA.076.003 ಅಲ್ಲಿಯೇ ಬಿಲ್ಲಿನ ಬಾಣಗಳನ್ನೂ ಗುರಾಣಿಯನ್ನೂ ಕತ್ತಿಯನ್ನೂ ಯುದ್ಧವನ್ನೂ ಮುರಿದುಬಿಟ್ಟನು. ಸೆಲಾ.
76:4b.PSA.076.004 ಬೇಟೆಗಳಿರುವ ಬೆಟ್ಟಗಳಿಗಿಂತ ನೀನು ಪ್ರಕಾಶವು ಳ್ಳವನೂ ಶ್ರೇಷ್ಠನೂ ಆಗಿದ್ದೀ.
76:5b.PSA.076.005 ಬಲವಾದ ಹೃದಯ ದವರು ಕೊಳ್ಳೆ ಮಾಡಲ್ಪಟ್ಟಿದ್ದಾರೆ, ತೂಕಡಿಸಿ ನಿದ್ರೆ ಹೋಗಿದ್ದಾರೆ; ಪರಾಕ್ರಮಿಗಳಲ್ಲಿ ಒಬ್ಬನೂ ತನ್ನ ಕೈಗ ಳನ್ನು ಕಂಡುಕೊಳ್ಳಲಿಲ್ಲ.
76:6b.PSA.076.006 ಓ ಯಾಕೋಬನ ದೇವರೇ, ನಿನ್ನ ಗದರಿಕೆಯಿಂದ ರಥವೂ ಕುದುರೆಯೂ ಗಾಢ ನಿದ್ರೆಯಲ್ಲಿ ಬಿದ್ದಿವೆ.
76:7b.PSA.076.007 ನೀನು, ನೀನೇ, ಭಯಹುಟ್ಟಿಸುತ್ತೀ; ನೀನು ಒಂದು ಸಾರಿ ಕೋಪಿಸಿಕೊಂಡರೆ ನಿನ್ನ ಮುಂದೆ ನಿಲ್ಲುವವನಾರು?
76:8b.PSA.076.008 ಆಕಾಶದಿಂದ ನ್ಯಾಯತೀರ್ವಿಕೆಯನ್ನು ಕೇಳಮಾಡಿದಿ.
76:9b.PSA.076.009 ದೇವರು ನ್ಯಾಯತೀರಿಸುವದಕ್ಕೂ ಭೂಮಿಯ ದೀನರೆಲ್ಲರನ್ನು ರಕ್ಷಿಸುವದಕ್ಕೂ ಏಳುವಾಗ ಭೂಮಿಯ ನಿವಾಸಿಗಳು ಭಯಪಟ್ಟು ಸ್ತಬ್ಧ ರಾದರು. ಸೆಲಾ.
76:10b.PSA.076.010 ನಿಶ್ಚಯವಾಗಿ ಮನುಷ್ಯನ ಕೋಪವು ನಿನ್ನನ್ನು ಕೊಂಡಾಡುವದು; ಕೋಪಶೇಷವನ್ನು ನೀನು ಬಿಗಿ ಹಿಡಿದು ಕೊಳ್ಳುವಿ.
76:11b.PSA.076.011 ನಿಮ್ಮ ದೇವರಾದ ಕರ್ತನಿಗೆ ಪ್ರಮಾಣಮಾಡಿ ಸಲ್ಲಿಸಿರಿ; ಆತನ ಸುತ್ತಲಿರುವವ ರೆಲ್ಲರು ಭಯಪಡಿಸುವಾತನಿಗೆ ಕಾಣಿಕೆಗಳನ್ನು ತರಲಿ.ಆತನು ಪ್ರಧಾನರ ಪ್ರಾಣವನ್ನು ತೆಗೆದು ಹಾಕು ತ್ತಾನೆ; ಭೂಮಿಯ ಅರಸುಗಳಿಗೆ ಭಯಂಕರ ನಾಗಿದ್ದಾನೆ.
76:12b.PSA.076.012 ಆತನು ಪ್ರಧಾನರ ಪ್ರಾಣವನ್ನು ತೆಗೆದು ಹಾಕು ತ್ತಾನೆ; ಭೂಮಿಯ ಅರಸುಗಳಿಗೆ ಭಯಂಕರ ನಾಗಿದ್ದಾನೆ.
77
77:1b.PSA.077.001 ನನ್ನ ಸ್ವರದಿಂದ ದೇವರಿಗೆ ಮೊರೆಯಿಟ್ಟೆನು, ದೇವರಿಗೆ ನನ್ನ ಸ್ವರದಿಂದ ಮೊರೆಯಿಟ್ಟೆನು; ಆತನು ನನ್ನ ಮೊರೆಯನ್ನು ಆಲೈಸಿದನು.
77:2b.PSA.077.002 ನನ್ನ ಇಕ್ಕ ಟ್ಟಿನ ದಿವಸದಲ್ಲಿ ಕರ್ತನನ್ನು ಹುಡುಕಿದೆನು; ನಾನು ರಾತ್ರಿಯೆಲ್ಲಾ ವ್ಯಥೆಪಟ್ಟದ್ದರಿಂದ ನನ್ನ ಪ್ರಾಣವು ಆದರಣೆ ಹೊಂದಲೊಲ್ಲದು.
77:3b.PSA.077.003 ನಾನು ವ್ಯಥೆಪಡುತ್ತಾ ದೇವರನ್ನು ಜ್ಞಾಪಕಮಾಡಿಕೊಂಡೆನು. ನಾನು ಚಿಂತಿ ಸುವದರಿಂದ ನನ್ನ ಆತ್ಮವು ಬಳಲಿ ಹೋಗಿದೆ ಸೆಲಾ.
77:4b.PSA.077.004 ನನ್ನ ಕಣ್ಣುಗಳನ್ನು ಮುಚ್ಚದಂತೆ ನೀನು ಹಿಡಿಯುತ್ತೀ; ನಾನು ಮಾತಾಡದಂತೆ ಕಳವಳಪಟ್ಟಿದ್ದೇನೆ.
77:5b.PSA.077.005 ಪುರಾ ತನ ದಿವಸಗಳನ್ನೂ ಆದಿಕಾಲದ ವರುಷಗಳನ್ನೂ ಯೋಚಿಸಿದೆನು.
77:6b.PSA.077.006 ನನ್ನ ಹಾಡನ್ನು ರಾತ್ರಿಯಲ್ಲಿ ಜ್ಞಾಪಕ ಮಾಡಿಕೊಳ್ಳುತ್ತೇನೆ; ನನ್ನ ಹೃದಯದ ಸಂಗಡ ಮಾತಾ ಡುತ್ತೇನೆ; ನನ್ನ ಆತ್ಮವು ಪರಿಶೋಧನೆ ಮಾಡಿತು.
77:7b.PSA.077.007 ನಿರಂತರವಾಗಿ ಕರ್ತನು ತಳ್ಳಿಬಿಡುವನೋ? ಇನ್ನು ದಯೆತೋರದೆ ಇರುವನೋ?
77:8b.PSA.077.008 ಆತನ ಕೃಪೆಯು ಸದಾಕಾಲಕ್ಕೆ ನಿಂತು ಹೋಗುತ್ತದೋ? ನಿರಂತರಕ್ಕೂ ವಾಗ್ದಾನ ತಪ್ಪಿಹೋಗುತ್ತದೋ?
77:9b.PSA.077.009 ದೇವರು ಕರು ಣಿಸುವದನ್ನು ಮರೆತು ಬಿಟ್ಟಿದ್ದಾನೋ? ತನ್ನ ಅಂತಃ ಕರಣಗಳನ್ನು ಕೋಪದಿಂದ ಮುಚ್ಚಿಕೊಂಡಿದ್ದಾನೋ? ಸೆಲಾ.
77:10b.PSA.077.010 ಇದೇ ನನ್ನ ಬಲಹೀನತೆ ಎಂದು ನಾನು ಅಂದುಕೊಂಡೆನು. ಮಹೋನ್ನತನ ಬಲಗೈಯ ವರ್ಷ ಗಳನ್ನು ಜ್ಞಾಪಕಮಾಡಿಕೊಳ್ಳುವೆನು;
77:11b.PSA.077.011 ಕರ್ತನ ಕ್ರಿಯೆಗಳನ್ನು ನೆನಸಿ ನಿಶ್ಚಯವಾಗಿ ಪುರಾತನ ಅದ್ಭುತ ಗಳನ್ನು ಜ್ಞಾಪಿಸಿಕೊಳ್ಳುವೆನು.
77:12b.PSA.077.012 ನಿನ್ನ ಕೆಲಸವನ್ನೆಲ್ಲಾ ಸ್ಮರಿಸಿ ನಿನ್ನ ಕೃತ್ಯಗಳನ್ನು ಕುರಿತು ಮಾತನಾಡುವೆನು.
77:13b.PSA.077.013 ಓ ದೇವರೇ, ನಿನ್ನ ಮಾರ್ಗವು ಪರಿಶುದ್ಧ ಆಲಯದಲ್ಲಿದೆ; ನಮ್ಮ ದೇವರಂತೆ ದೊಡ್ಡ ದೇವರು ಯಾರು?
77:14b.PSA.077.014 ಅದ್ಭುತಗಳನ್ನು ನಡಿಸುವ ದೇವರು ನೀನೇ; ನಿನ್ನ ಬಲವನ್ನು ಜನರಲ್ಲಿ ತೋರಿಸಿದ್ದೀ.
77:15b.PSA.077.015 ಯಾಕೋಬನ ಮತ್ತು ಯೋಸೇಫನ ಮಕ್ಕಳಾದ ನಿನ್ನ ಜನರನ್ನು ತೋಳಿನಿಂದ ವಿಮೋಚನೆ ಮಾಡಿದ್ದೀ ಸೆಲಾ.
77:16b.PSA.077.016 ನೀರು ಗಳು ನಿನ್ನನ್ನು ನೋಡಿದವು; ಓ ದೇವರೇ, ನೀರುಗಳು ನಿನ್ನನ್ನು ನೋಡಿ ಭ್ರಮೆಗೊಂಡವು; ಅಗಾಧಗಳು ನಡುಗಿದವು.
77:17b.PSA.077.017 ಮೋಡಗಳು ನೀರನ್ನು ಸುರಿಸಿದವು; ಆಕಾಶಗಳು ಶಬ್ದ ಮಾಡಿದವು; ನಿನ್ನ ಬಾಣಗಳು ಸಹ ಹಾರಿ ಬಂದವು.
77:18b.PSA.077.018 ನಿನ್ನ ಗುಡುಗಿನ ಶಬ್ದವು ಆಕಾಶ ಮಂಡಲದಲ್ಲಿ ಇತ್ತು; ಮಿಂಚುಗಳು ಜಗತ್ತನ್ನು ಬೆಳಗ ಮಾಡಿದವು; ಭೂಮಿಯು ನಡುಗಿ ಕದಲಿತು.
77:19b.PSA.077.019 ನಿನ್ನ ಮಾರ್ಗವು ಸಮುದ್ರದಲ್ಲಿ ಅದೆ; ನಿನ್ನ ಹಾದಿಯು ಬಹಳ ನೀರುಗಳಲ್ಲಿ ಅವೆ; ನಿನ್ನ ಹೆಜ್ಜೆಗಳು ತಿಳಿಯ ಲ್ಪಡಲಿಲ್ಲ.ಮೋಶೆ ಆರೋನರ ಕೈಯಿಂದ ನಿನ್ನ ಜನರನ್ನು ಮಂದೆಯ ಹಾಗೆ ನಡಿಸಿದಿ.
77:20b.PSA.077.020 ಮೋಶೆ ಆರೋನರ ಕೈಯಿಂದ ನಿನ್ನ ಜನರನ್ನು ಮಂದೆಯ ಹಾಗೆ ನಡಿಸಿದಿ.
78
78:1b.PSA.078.001 ಓ ನನ್ನ ಜನರೇ, ನನ್ನ ನ್ಯಾಯಪ್ರಮಾಣಕ್ಕೆ ಕಿವಿಗೊಡಿರಿ; ನನ್ನ ಬಾಯಿ ಮಾತುಗಳಿಗೆ ನಿಮ್ಮ ಕಿವಿಗಳನ್ನು ಬೊಗ್ಗಿಸಿರಿ.
78:2b.PSA.078.002 ಸಾಮ್ಯವನ್ನು ಹೇಳಲು ನನ್ನ ಬಾಯಿ ತೆರೆಯುವೆನು; ಪೂರ್ವಕಾಲದಿಂದಿರುವ ಗುಪ್ತವಾದವುಗಳನ್ನು ನುಡಿಯುವೆನು.
78:3b.PSA.078.003 ಅವುಗಳನ್ನು ಕೇಳಿ ತಿಳಿದಿದ್ದೇವೆ; ನಮ್ಮ ತಂದೆಗಳು ನಮಗೆ ವಿವರಿಸಿದರು.
78:4b.PSA.078.004 ನಾವು ಕರ್ತನ ಸ್ತೋತ್ರಗಳನ್ನೂ ಆತನ ತ್ರಾಣವನ್ನೂ ಆತನು ಮಾಡಿದ ಅದ್ಭುತಗಳನ್ನೂ ವಿವರಿಸುತ್ತಾ ಅವರ ಮಕ್ಕಳಿಗೆ, ಮುಂದಿನ ವಂಶಕ್ಕೆ ಮರೆಮಾಡುವದಿಲ್ಲ.
78:5b.PSA.078.005 ಆತನು ಯಾಕೋಬನಲ್ಲಿ ಸಾಕ್ಷಿ ಯನ್ನು ಸ್ಥಾಪಿಸಿ ಇಸ್ರಾಯೇಲಿನಲ್ಲಿ ನ್ಯಾಯಪ್ರಮಾಣವನ್ನು ಇಟ್ಟು
78:6b.PSA.078.006 ಮುಂದಿನ ವಂಶವು ಅಂದರೆ ಹುಟ್ಟುವ ದಕ್ಕಿರುವ ಮಕ್ಕಳು ತಿಳಿದು, ಎದ್ದು, ತಮ್ಮ ಮಕ್ಕಳಿಗೆ ವಿವರಿಸಲಾಗಿ
78:7b.PSA.078.007 ಇವರು ದೇವರಲ್ಲಿ ತಮ್ಮ ನಿರೀಕ್ಷೆ ಇಡುವಂತೆಯೂ ದೇವರ ಕ್ರಿಯೆಗಳನ್ನು ಮರೆತುಬಿಡ ದಂತೆಯೂ ಆತನ ಆಜ್ಞೆಗಳನ್ನು ಕೈಕೊಂಡು
78:8b.PSA.078.008 ತಮ್ಮ ತಂದೆಗಳ ಹಾಗೆ ತಮ್ಮ ಹೃದಯವನ್ನು ಸ್ಥಿರಪಡಿಸು ವಂತೆಯೂ ತಮ್ಮ ಆತ್ಮವು ದೇವರೊಂದಿಗೆ ಸ್ಥಿರವಾಗು ವಂತೆಯೂ ಗರ್ವದಿಂದ ತಿರುಗಿ ಬೀಳುವಂಥ ವಂಶ ವಾಗಿರದ ಹಾಗೆಯೂ ಅದನ್ನು ತಮ್ಮ ಮಕ್ಕಳಿಗೆ ತಿಳಿ ಯಮಾಡಬೇಕೆಂದು ನಮ್ಮ ತಂದೆಗಳಿಗೆ ಆತನು ಆಜ್ಞಾಪಿಸಿದನು.
78:9b.PSA.078.009 ಎಫ್ರಾಯಾಮನ ಮಕ್ಕಳು ಆಯುಧಗಳನ್ನು ಧರಿಸಿ ಬಿಲ್ಲುಗಳನ್ನು ಹೊತ್ತುಕೊಂಡು ಕಾಳಗದ ದಿವಸದಲ್ಲಿ ಹಿಂತಿರುಗಿಕೊಂಡರು.
78:10b.PSA.078.010 ಅವರು ದೇವರ ಒಡಂಬಡಿಕೆ ಯನ್ನು ಕೈಕೊಳ್ಳದೆ ಆತನ ನ್ಯಾಯಪ್ರಮಾಣದಲ್ಲಿ ನಡೆಯಲೊಲ್ಲದೆ ಇದ್ದರು.
78:11b.PSA.078.011 ಆತನು ಅವರಿಗೆ ತೋರಿ ಸಿದ ಆತನ ಕೃತ್ಯಗಳನ್ನೂ ಆದ್ಭುತಗಳನ್ನೂ ಮರೆತು ಬಿಟ್ಟರು.
78:12b.PSA.078.012 ಅವರ ತಂದೆಗಳ ಮುಂದೆ ಐಗುಪ್ತ ದೇಶ ದಲ್ಲಿ, ಸೋನ್ ಬೈಲಿನಲ್ಲಿ ಆತನು ಅದ್ಭುತಗಳನ್ನು ಮಾಡಿದನು.
78:13b.PSA.078.013 ಆತನು ಸಮುದ್ರವನ್ನು ವಿಭಾಗಿಸಿ ಅವರನ್ನು ದಾಟಿಸಿದನು; ನೀರನ್ನು ಕುಪ್ಪೆಯಾಗಿ ನಿಲ್ಲಿಸಿ ದನು.
78:14b.PSA.078.014 ಹಗಲಿನಲ್ಲಿ ಮೇಘದಿಂದ, ರಾತ್ರಿಯೆಲ್ಲಾ ಬೆಂಕಿಯ ಬೆಳಕಿನಿಂದ ಅವರನ್ನು ನಡಿಸಿದನು.
78:15b.PSA.078.015 ಅರಣ್ಯ ದಲ್ಲಿ ಆತನು ಬಂಡೆಗಳನ್ನು ಸೀಳಿ ಅವರಿಗೆ ಮಹಾ ಜಲಾಗಾಧಗಳ ಹಾಗೆ ನೀರು ಕುಡಿಯಲು ಕೊಟ್ಟನು.
78:16b.PSA.078.016 ಬಂಡೆಯೊಳಗಿಂದ ಹೊಳೆಗಳನ್ನು ಹೊರಗೆ ತಂದು ನದಿಗಳಂತೆ ನೀರನ್ನು ಹರಿಯಮಾಡಿದನು.
78:17b.PSA.078.017 ಆದರೆ ಅವರು ಇನ್ನೂ ಆತನಿಗೆ ವಿರೋಧವಾಗಿ ಪಾಪಮಾಡಿ ಅರಣ್ಯದಲ್ಲಿ ಮಹೋನ್ನತನಿಗೆ ಕೋಪ ವನ್ನೆಬ್ಬಿಸಿ
78:18b.PSA.078.018 ದೇವರನ್ನು ತಮ್ಮ ಹೃದಯದಲ್ಲಿ ಶೋಧಿಸು ವವರಾಗಿ ತಮ್ಮ ದುರಾಶೆಗಳಿಗ್ಕೋಸ್ಕರ ಆಹಾರವನ್ನು ಕೇಳಿದರು.
78:19b.PSA.078.019 ಹೌದು, ಅವರು ದೇವರಿಗೆ ವಿರೋಧ ವಾಗಿ ಮಾತನಾಡಿ--ದೇವರು ಅರಣ್ಯದಲ್ಲಿ ಮೇಜನ್ನು ಸಿದ್ಧ ಮಾಡಬಲ್ಲನೋ ಅಂದರು.
78:20b.PSA.078.020 ಇಗೋ, ಆತನು ಬಂಡೆಯನ್ನು ಹೊಡೆಯಲಾಗಿ ನೀರು ಹೊರಟಿತು; ಹಳ್ಳಗಳು ಹರಿದವು; ರೊಟ್ಟಿಯನ್ನೂ ಕೊಡಬಲ್ಲನೋ? ತನ್ನ ಜನರಿಗೆ ಮಾಂಸವನ್ನು ಸಿದ್ಧ ಮಾಡುವನೋ ಅಂದರು.
78:21b.PSA.078.021 ಆದದರಿಂದ ಕರ್ತನು ಇದನ್ನು ಕೇಳಿದಾಗ ಉಗ್ರನಾದನು; ಯಾಕೋಬನಲ್ಲಿ ಬೆಂಕಿ ಹೊತ್ತಿತ್ತು; ಇಸ್ರಾಯೇಲಿನ ಮೇಲೆ ಕೋಪವು ಸಹ ಎದ್ದಿತು.
78:22b.PSA.078.022 ಅವರು ದೇವರಲ್ಲಿ ನಂಬಿಕೆ ಇಡಲಿಲ್ಲ; ಆತನ ರಕ್ಷಣೆಯಲ್ಲಿ ಭರವಸವಿಡಲಿಲ್ಲ.
78:23b.PSA.078.023 ಆದರೆ ಆತನು ಮೇಲಿರುವ ಮೇಘಗಳಿಗೆ ಆಜ್ಞಾಪಿಸಿ ಪರಲೋಕದ ಕದಗಳನ್ನು ತೆರೆದನು.
78:24b.PSA.078.024 ಉಣ್ಣುವದಕ್ಕೆ ಮನ್ನವನ್ನು ಅವರ ಮೇಲೆ ಸುರಿಸಿ ಪರಲೋಕದ ಧಾನ್ಯವನ್ನು ಅವರಿಗೆ ಕೊಟ್ಟನು.
78:25b.PSA.078.025 ಮನುಷ್ಯನು ದೂತರ ಆಹಾರ ವನ್ನು ತಿಂದನು; ತೃಪ್ತಿಯಾಗುವಷ್ಟು ಆಹಾರವನ್ನು ಅವರಿಗೆ ಆತನು ಕಳುಹಿಸಿದನು.
78:26b.PSA.078.026 ಮೂಡಣ ಗಾಳಿ ಯನ್ನು ಆಕಾಶದಲ್ಲಿ ಹುಟ್ಟಿಸಿ ತನ್ನ ಬಲದಿಂದ ದಕ್ಷಿಣ ಗಾಳಿಯನ್ನು ತಂದನು.
78:27b.PSA.078.027 ಧೂಳಿನಂತೆ ಮಾಂಸವನ್ನೂ ಸಮುದ್ರದ ಮರಳಿನಂತೆ ರೆಕ್ಕೆಯುಳ್ಳ ಪಕ್ಷಿಗಳನ್ನೂ ಅವರ ಮೇಲೆ ಸುರಿಸಿ
78:28b.PSA.078.028 ಅವರ ಮಧ್ಯದಲ್ಲಿಯೂ ಅವರ ನಿವಾಸಗಳ ಸುತ್ತಲೂ ಬೀಳಮಾಡಿದನು.
78:29b.PSA.078.029 ಅವರು ತಿಂದು ಬಹಳ ತೃಪ್ತಿಯಾದರು; ಅವರು ಆಶಿಸಿದ್ದನ್ನು ಆತನು ಅವರಿಗೆ ಕೊಟ್ಟನು.
78:30b.PSA.078.030 ಅವರು ತಮ್ಮ ಆಶೆಯನ್ನು ಬಿಡದೆ ಅವರ ಊಟವು ಇನ್ನೂ ಅವರ ಬಾಯಿಯಲ್ಲಿ ಇರುವಾಗ
78:31b.PSA.078.031 ದೇವರ ಕೋಪವು ಅವರ ಮೇಲೆ ಎದ್ದು ಅವರಲ್ಲಿ ಕೊಬ್ಬಿದವ ರನ್ನು ಕೊಂದುಹಾಕಿ ಇಸ್ರಾಯೇಲಿನ ಪ್ರಾಯಸ್ಥರನ್ನು ಹೊಡೆದು ಬೀಳಿಸಿತು.
78:32b.PSA.078.032 ಇದೆಲ್ಲಾ ಆದಾಗ್ಯೂ ಅವರು ಇನ್ನೂ ಪಾಪಮಾಡಿ ಆತನ ಆದ್ಭುತಗಳನ್ನು ನಂಬ ಲಿಲ್ಲ.
78:33b.PSA.078.033 ಆಗ ಆತನು ಅವರ ದಿವಸಗಳನ್ನು ಉಸಿರಿ ನಂತೆಯೂ ಅವರ ವರುಷಗಳನ್ನು ಕಳವಳದಲ್ಲಿಯೂ ಮುಗಿಸಿದನು.
78:34b.PSA.078.034 ಅವರನ್ನು ಕೊಲ್ಲುವಾಗ ಅವರು ಆತನನ್ನು ಹುಡುಕಿ ತಿರುಗಿಕೊಂಡು ದೇವರನ್ನು ಹೊತ್ತಾರೆ ವಿಚಾರಿಸಿ
78:35b.PSA.078.035 ದೇವರು ತಮ್ಮ ಬಂಡೆ ಎಂದೂ ಮಹೋನ್ನತ ನಾದ ದೇವರು ತಮ್ಮ ವಿಮೋಚಕನೆಂದೂ ಜ್ಞಾಪಕ ಮಾಡಿಕೊಂಡರು.
78:36b.PSA.078.036 ಆದಾಗ್ಯೂ ತಮ್ಮ ಬಾಯಿಗಳಿಂದ ಆತನಿಗೆ ಮುಖಸ್ತುತಿ ಮಾಡಿ ತಮ್ಮ ನಾಲಿಗೆಯಿಂದ ಆತನಿಗೆ ಸುಳ್ಳು ಹೇಳಿದರು.
78:37b.PSA.078.037 ಅವರ ಹೃದಯವು ಆತನ ಸಂಗಡ ಇರಲಿಲ್ಲ ಅವರು ಆತನ ಒಡಂಬಡಿ ಕೆಯಲ್ಲೂ ಸ್ಥಿರವಾಗಿರಲಿಲ್ಲ
78:38b.PSA.078.038 ಆದಾಗ್ಯೂ ಆತನು ಅಂತಃಕರಣವುಳ್ಳವನಾಗಿ, ಅವರ ಅಕ್ರಮವನ್ನು ಕ್ಷಮಿಸಿ, ನಾಶಮಾಡದೆ ಹೌದು, ಆತನು ಅನೇಕ ಸಾರಿ ತನ್ನ ಕೋಪವನ್ನು ತೋರಿಸದೆ ಕೋಪೋದ್ರೇಕವನ್ನೂ ಮಾಡಿಕೊಳ್ಳಲಿಲ್ಲ.
78:39b.PSA.078.039 ಅವರು ಕೇವಲ ಮನುಷ್ಯ ರೆಂದು, ಹಾರಿಹೋಗಿ ತಿರುಗಿಬಾರದ ಗಾಳಿಯಾಗಿ ದ್ದಾರೆಂದು ಆತನು ಜ್ಞಾಪಕಮಾಡಿಕೊಂಡನು.
78:40b.PSA.078.040 ಎಷ್ಟೋ ಸಾರಿ ಅವರು ಅರಣ್ಯದಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು. ಕಾಡಿನಲ್ಲಿ ಆತನನ್ನು ದುಃಖ ಪಡಿಸಿದರು.
78:41b.PSA.078.041 ಹೌದು, ಅವರು ತಿರುಗಿಬಿದ್ದು ದೇವ ರನ್ನು ಪರೀಕ್ಷಿಸಿ ಇಸ್ರಾಯೇಲಿನ ಪರಿಶುದ್ಧನಿಗೆ ಮಿತಿ ಮಾಡಿದರು.
78:42b.PSA.078.042 ಆತನು ಅವರನ್ನು ವೈರಿಯಿಂದ ವಿಮೋಚಿಸಿದ್ದನ್ನೂ
78:43b.PSA.078.043 ಐಗುಪ್ತದಲ್ಲಿ ಆದ ಸೂಚಕ ಕಾರ್ಯಗಳನ್ನೂ ಸೋನ್ ಬೈಲಿನಲ್ಲಿ ನಡಿಸಿದ ಅದ್ಭುತ ಗಳನ್ನೂ ಮಾಡಿದ ದಿವಸವನ್ನೂ ಆತನ ಕೈಯನ್ನೂ ಅವರು ಜ್ಞಾಪಕಮಾಡಿಕೊಳ್ಳಲಿಲ್ಲ.
78:44b.PSA.078.044 ಅವರು ಕುಡಿ ಯಲಾರದ ಹಾಗೆ ಅವರ ನದಿಗಳನ್ನೂ ಹೊಳೆಗ ಳನ್ನೂ ಆತನು ರಕ್ತಕ್ಕೆ ಮಾರ್ಪಡಿಸಿದನು.
78:45b.PSA.078.045 ಅವರಲ್ಲಿ ವಿವಿಧ ಹುಳಗಳನ್ನು ಕಳುಹಿಸಿದನು, ಅವು ಅವರನ್ನು ತಿಂದು ಬಿಟ್ಟವು; ಕಪ್ಪೆಗಳನ್ನು ಸಹ ಕಳುಹಿಸಿದನು; ಅವು ಅವರನ್ನು ನಾಶಮಾಡಿದವು.
78:46b.PSA.078.046 ಅವರ ಬೆಳೆ ಯನ್ನು ಕಂಬಳಿ ಹುಳಗಳಿಗೂ ವ್ಯವಸಾಯವನ್ನು ಮಿಡಿತೆಗಳಿಗೂ ಕೊಟ್ಟು
78:47b.PSA.078.047 ಅವರ ದ್ರಾಕ್ಷೇ ಬಳ್ಳಿಗ ಳನ್ನು ಕಲ್ಮಳೆಯಿಂದಲೂ ಆಲದ ಮರಗಳನ್ನು ಮಂಜಿ ನಿಂದಲೂ ನಾಶ ಮಾಡಿ
78:48b.PSA.078.048 ಅವರ ದನಗಳನ್ನು ಕಲ್ಮ ಳೆಗೂ ಮಂದೆಗಳನ್ನು ಸಿಡಿಲಿಗೂ ಒಪ್ಪಿಸಿಬಿಟ್ಟನು.
78:49b.PSA.078.049 ಉಪದ್ರಪಡಿಸುವ ದೂತರನ್ನೋ ಎಂಬಂತೆ ತನ್ನ ಕೋಪದ ಉರಿಯನ್ನು ಉಗ್ರ, ರೋಷ, ಇಕ್ಕಟ್ಟುಗಳನ್ನು ಅವರ ಮೇಲೆ ಸುರಿಸಿದನು.
78:50b.PSA.078.050 ತನ್ನ ಕೋಪಕ್ಕೆ ದಾರಿಮಾಡಿ ಅವರ ಪ್ರಾಣವನ್ನು ಸಾವಿನಿಂದ ಉಳಿಸದೆ ಅವರ ಜೀವವನ್ನು ಜಾಡ್ಯಕ್ಕೆ ಒಪ್ಪಿಸಿ
78:51b.PSA.078.051 ಐಗುಪ್ತದಲ್ಲಿ ಚೊಚ್ಚಲವಾದವರೆಲ್ಲರನ್ನೂ ಹಾಮನ ಗುಡಾರಗಳಲ್ಲಿ ಶಕ್ತಿಯ ಪ್ರಥಮ ಫಲವನ್ನೂ ಹೊಡೆದನು.
78:52b.PSA.078.052 ಕುರಿಗಳ ಹಾಗೆ ತನ್ನ ಜನರನ್ನು ಹೊರತಂದು, ಮಂದೆಯ ಹಾಗೆ ಅರಣ್ಯದಲ್ಲಿ ಅವರನ್ನು ನಡಿಸಿದನು.
78:53b.PSA.078.053 ಅವರನ್ನು ಸುರಕ್ಷಿತವಾಗಿ ನಡಿಸಿದಕಾರಣ ಅವರು ಹೆದರಲಿಲ್ಲ; ಆದರೆ ಸಮುದ್ರವು ಅವರ ಶತ್ರುಗಳನ್ನು ಮುಚ್ಚಿಬಿಟ್ಟಿತು.
78:54b.PSA.078.054 ತನ್ನ ಪರಿಶುದ್ದಾಲಯದ ಮೇರೆಗೂ ಆತನ ಬಲಗೈ ಕೊಂಡುಕೊಂಡ ಈ ಪರ್ವತಕ್ಕೂ ಅವರನ್ನು ಬರ ಮಾಡಿದನು.
78:55b.PSA.078.055 ಅನ್ಯಜನಾಂಗವನ್ನು ಅವರ ಮುಂದೆ ಹೊರಗೆ ಹಾಕಿ, ಅವರ ಬಾಧ್ಯತೆಯನ್ನು ಅಳತೆಮಾಡಿ, ಹಂಚಿ, ಅವರ ಗುಡಾರಗಳಲ್ಲಿ ಇಸ್ರಾಯೇಲಿನ ಗೋತ್ರ ಗಳು ವಾಸಿಸುವಂತೆ ಮಾಡಿದನು.
78:56b.PSA.078.056 ಆದರೆ ಅವರು ಮಹೋನ್ನತನಾದ ದೇವರನ್ನು ಪರೀಕ್ಷಿಸಿ ರೇಗಿಸಿದರು; ಆತನ ವಿಧಿಗಳನ್ನು ಕೈಕೊಳ್ಳ ಲಿಲ್ಲ.
78:57b.PSA.078.057 ತಮ್ಮ ಪಿತೃಗಳ ಹಾಗೆ ತಿರುಗಿಬಿದ್ದು ಅಪ ನಂಬಿಗಸ್ತರಾಗಿ ಮೋಸದ ಬಿಲ್ಲಿನ ಹಾಗೆ ವಾರೆ ಯಾದರು.
78:58b.PSA.078.058 ತಮ್ಮ ಉನ್ನತ ಸ್ಥಳಗಳಿಂದ ಆತನಿಗೆ ಕೋಪವನ್ನೆಬ್ಬಿಸಿ ಕೆತ್ತಿದ ತಮ್ಮ ವಿಗ್ರಹಗಳಿಂದ ಆತನಿಗೆ ರೋಷವನ್ನೆಬ್ಬಿಸಿದರು.
78:59b.PSA.078.059 ದೇವರು ಇದನ್ನು ಕೇಳಿ ಉಗ್ರನಾಗಿ ಇಸ್ರಾಯೇಲನ್ನು ಬಹು ಅಸಹ್ಯಿಸಿ ಬಿಟ್ಟು,
78:60b.PSA.078.060 ಸಿಲೋವಿನ ಗುಡಾರವನ್ನೂ ಮನುಷ್ಯರೊಳಗೆ ಆತನು ಹಾಕಿದ ಗುಡಾರವನ್ನೂ ಬಿಟ್ಟು,
78:61b.PSA.078.061 ತನ್ನ ಬಲ ವನ್ನು ಸೆರೆಗೂ ಮಹಿಮೆಯನ್ನು ವೈರಿಯ ಕೈಗೂ ಕೊಟ್ಟುಬಿಟ್ಟನು.
78:62b.PSA.078.062 ತನ್ನ ಜನರನ್ನು ಕತ್ತಿಗೆ ಒಪ್ಪಿಸಿಕೊಟ್ಟು ತನ್ನ ಬಾಧ್ಯತೆಗೆ ವಿರೋಧವಾಗಿ ಉಗ್ರನಾದನು.
78:63b.PSA.078.063 ಅವರ ಪ್ರಾಯಸ್ಥರನ್ನು ಬೆಂಕಿಯು ದಹಿಸಿಬಿಟ್ಟಿತು; ಅವರ ಕನ್ಯೆಯರು ಮದುವೆಯಾಗಲಿಲ್ಲ.
78:64b.PSA.078.064 ಅವರ ಯಾಜಕರು ಕತ್ತಿಯಿಂದ ಸಂಹಾರವಾದರು; ಅವರ ವಿಧವೆಯರು ಗೋಳಾಡಲಿಲ್ಲ.
78:65b.PSA.078.065 ಆಗ ಕರ್ತನು ನಿದ್ದೆಯಿಂದ ಎಚ್ಚತ್ತವನ ಹಾಗೆಯೂ ದ್ರಾಕ್ಷಾರಸದಿಂದ ಆರ್ಭಟಿಸುವ ಪರಾಕ್ರಮಶಾಲಿಯ ಹಾಗೆಯೂ ಎಚ್ಚತ್ತು,
78:66b.PSA.078.066 ತನ್ನ ವೈರಿಗಳನ್ನು ಹಿಂದಕ್ಕೆ ಹೊಡೆದು, ನಿತ್ಯ ನಿಂದೆಯನ್ನು ಅವರಿಗೆ ಕೊಟ್ಟನು.
78:67b.PSA.078.067 ಆತನು ಯೋಸೇಫನ ಗುಡಾರವನ್ನು ತಿರಸ್ಕರಿಸಿ, ಎಫ್ರಾಯಾಮನ ಗೋತ್ರವನ್ನು ಆದು ಕೊಳ್ಳದೆ,
78:68b.PSA.078.068 ಯೆಹೂದನ ಕುಲವನ್ನೂ ತಾನು ಪ್ರೀತಿ ಮಾಡಿದ ಚೀಯೋನ್ ಪರ್ವತವನ್ನೂ ಆದುಕೊಂಡು,
78:69b.PSA.078.069 ಉನ್ನತವಾದವುಗಳಂತೆಯೂ ಯುಗಯುಗಕ್ಕೂ ತಾನು ಅಸ್ತಿವಾರ ಹಾಕಿದ ಭೂಮಿಯಂತೆಯೂ ತನ್ನ ಪರಿಶುದ್ಧಾಲಯವನ್ನು ಕಟ್ಟಿದನು
78:70b.PSA.078.070 ಇದಲ್ಲದೆ ತನ್ನ ಸೇವಕನಾದ ದಾವೀದನನ್ನು ಆದುಕೊಂಡು, ಕುರಿ ಹಟ್ಟಿಗಳಿಂದ ಅವನನ್ನು ತೆಗೆದು,
78:71b.PSA.078.071 ತನ್ನ ಪ್ರಜೆಯಾದ ಯಾಕೋಬನ್ನೂ ಭಾದ್ಯತೆಯಾದ ಇಸ್ರಾಯೇಲನ್ನೂ ಮೇಯಿಸುವ ಹಾಗೆ, ಅವನನ್ನು ಕುರಿಮರಿಗಳ ಹಿಂಡಿ ನಿಂದ ತಂದನು.ಆತನು ತನ್ನ ಹೃದಯದ ಯಥಾ ರ್ಥತ್ವದ ಪ್ರಕಾರ ಅವರನ್ನು ಮೇಯಿಸಿ ತನ್ನ ಹಸ್ತ ಕೌಶಲ್ಯದಿಂದ ಅವರನ್ನು ನಡಿಸಿದನು.
78:72b.PSA.078.072 ಆತನು ತನ್ನ ಹೃದಯದ ಯಥಾ ರ್ಥತ್ವದ ಪ್ರಕಾರ ಅವರನ್ನು ಮೇಯಿಸಿ ತನ್ನ ಹಸ್ತ ಕೌಶಲ್ಯದಿಂದ ಅವರನ್ನು ನಡಿಸಿದನು.
79
79:1b.PSA.079.001 ದೇವರೇ, ಅನ್ಯಜನಾಂಗಗಳು ನಿನ್ನ ಬಾಧ್ಯತೆಯೊಳಗೆ ಬಂದು, ನಿನ್ನ ಪರಿಶುದ್ಧ ಮಂದಿರವನ್ನು ಅಪವಿತ್ರ ಮಾಡಿ, ಯೆರೂಸಲೇಮನ್ನು ಹಾಳು ದಿಬ್ಬಗಳಾಗಿ ಮಾಡಿದ್ದಾರೆ.
79:2b.PSA.079.002 ನಿನ್ನ ಸೇವಕರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಪರಿಶುದ್ಧರ ಮಾಂಸ ವನ್ನು ಭೂಮಿಯ ಮೃಗಗಳಿಗೂ ಆಹಾರವಾಗಿ ಕೊಟ್ಟಿ ದ್ದಾರೆ.
79:3b.PSA.079.003 ಅವರ ರಕ್ತವನ್ನು ಯೆರೂಸಲೇಮಿನ ಸುತ್ತಲೂ ನೀರಿನ ಹಾಗೆ ಚೆಲ್ಲಿದ್ದಾರೆ; ಅವರನ್ನು ಹೂಣಿಡುವ ವನೊಬ್ಬನೂ ಇಲ್ಲ.
79:4b.PSA.079.004 ನಮ್ಮ ನೆರೆಯವರಿಗೆ ನಿಂದೆಯೂ ನಮ್ಮ ಸುತ್ತಲಿರುವವರಿಗೆ ಗೇಲಿಯೂ ಹಾಸ್ಯವೂ ಆಗಿದ್ದೇವೆ.
79:5b.PSA.079.005 ಕರ್ತನೇ, ನೀನು ಯಾವಾಗಲೂ ಕೋಪ ಮಾಡು ವದೂ ನಿನ್ನ ರೋಷವು ಬೆಂಕಿಯ ಹಾಗೆ ಉರಿಯು ವದೂ ಎಷ್ಟರವರೆಗೆ?
79:6b.PSA.079.006 ನಿನ್ನನ್ನು ತಿಳಿಯದ ಜನಾಂಗ ಗಳ ಮೇಲೆಯೂ ನಿನ್ನ ಹೆಸರನ್ನು ಕರೆಯದ ರಾಜ್ಯಗಳ ಮೇಲೆಯೂ ನಿನ್ನ ಕೋಪವನ್ನು ಹೊಯಿದುಬಿಡು.
79:7b.PSA.079.007 ಅವರು ಯಾಕೋಬನ್ನು ನುಂಗಿಬಿಟ್ಟಿದ್ದಾರೆ; ಅವನ ನಿವಾಸವನ್ನು ಹಾಳುಮಾಡಿದ್ದಾರೆ.
79:8b.PSA.079.008 ಪೂರ್ವಕಾಲದ ಅಕ್ರಮಗಳನ್ನು ನಮಗೆ ವಿರೋಧವಾಗಿ ಜ್ಞಾಪಕಮಾಡಿ ಕೊಳ್ಳಬೇಡ. ನಿನ್ನ ಅಂತಃಕರಣಗಳು ಬೇಗ ನಮ್ಮನ್ನು ಎದುರುಗೊಳ್ಳಲ್ಲಿ; ಬಹಳವಾಗಿ ಕುಗ್ಗಿ ಹೋಗಿದ್ದೇವೆ.
79:9b.PSA.079.009 ಓ ನಮ್ಮ ರಕ್ಷಣೆಯ ದೇವರೇ, ನಿನ್ನ ಹೆಸರಿನ ಘನದ ನಿಮಿತ್ತ ನಮಗೆ ಸಹಾಯ ಮಾಡು; ನಿನ್ನ ಹೆಸರಿಗಾಗಿ ನಮ್ಮನ್ನು ಬಿಡಿಸಿ ನಮ್ಮ ಪಾಪಗಳನ್ನು ತೊಳೆದುಬಿಡು.
79:10b.PSA.079.010 ಅವರ ದೇವರು ಎಲ್ಲಿ ಎಂದು ಅನ್ಯಜನಾಂಗಗಳು ಯಾಕೆ ಹೇಳಬೇಕು? ಚೆಲ್ಲಿರುವ ನಿನ್ನ ಸೇವಕರ ರಕ್ತದ ಪ್ರತಿ ದಂಡನೆಯನ್ನು ನಮ್ಮ ಕಣ್ಣುಗಳ ಮುಂದೆ ಅನ್ಯ ಜನಾಂಗಗಳಲ್ಲಿ ತಿಳಿಯಲ್ಪಡಲಿ.
79:11b.PSA.079.011 ಸೆರೆಯವನ ನಿಟ್ಟುಸಿರು ನಿನ್ನ ಮುಂದೆ ಬರಲಿ--ನಿನ್ನ ಮಹಾ ಶಕ್ತಿಯಿಂದ ಸಾಯುವದಕ್ಕಿರುವವರನ್ನು ಕಾಪಾಡು.
79:12b.PSA.079.012 ಓ ಕರ್ತನೇ, ಅವರು ನಿನ್ನನ್ನು ನಿಂದಿಸಿದ ನಿಂದೆ ಯನ್ನು ನಮ್ಮ ನೆರೆಯವರಿಗೆ ಏಳರಷ್ಟು ಅವರ ಉಡಿ ಯಲ್ಲಿ ತಿರಿಗಿ ಹಾಕು.ಆಗ ನಿನ್ನ ಜನರೂ ನಿನ್ನ ಹುಲ್ಲುಗಾವಲಿನ ಕುರಿಗಳೂ ಆಗಿರುವ ನಾವು ಎಂದೆಂದಿಗೂ ನಿನ್ನನ್ನು ಕೊಂಡಾಡಿ ತಲತಲಾಂತರಕ್ಕೂ ನಿನ್ನ ಸ್ತೋತ್ರವನ್ನು ಸಾರುವೆವು.
79:13b.PSA.079.013 ಆಗ ನಿನ್ನ ಜನರೂ ನಿನ್ನ ಹುಲ್ಲುಗಾವಲಿನ ಕುರಿಗಳೂ ಆಗಿರುವ ನಾವು ಎಂದೆಂದಿಗೂ ನಿನ್ನನ್ನು ಕೊಂಡಾಡಿ ತಲತಲಾಂತರಕ್ಕೂ ನಿನ್ನ ಸ್ತೋತ್ರವನ್ನು ಸಾರುವೆವು.
80
80:1b.PSA.080.001 ಯೋಸೇಫ್ಯರನ್ನು ಮಂದೆಯಂತೆ ನಡಿಸುವಾತನೇ, ಇಸ್ರಾಯೇಲ್ಯರ ಕುರುಬನೇ, ಕಿವಿಗೊಡು; ಕೆರೂಬಿಗಳ ಮಧ್ಯದಲ್ಲಿ ವಾಸಿಸುವಾತನೇ, ಪ್ರಕಾಶಿಸು.
80:2b.PSA.080.002 ಎಫ್ರಾಯಾಮ್ ಬೆನ್ಯಾವಿಾನ್ ಮನಸ್ಸೆ ಯರ ಮುಂದೆ ನಿನ್ನ ಪರಾಕ್ರಮವನ್ನು ತೋರಿಸಿ ನಮ್ಮನ್ನು ರಕ್ಷಿಸು.
80:3b.PSA.080.003 ಓ ದೇವರೇ, ನಮ್ಮನ್ನು ಮತ್ತೆ ತಿರುಗಿಸಿ ನಿನ್ನ ಮುಖವನ್ನು ಪ್ರಕಾಶಿಸುವಂತೆ ಮಾಡು; ಆಗ ನಾವು ರಕ್ಷಿಸಲ್ಪಡುವೆವು.
80:4b.PSA.080.004 ಸೈನ್ಯಗಳ ದೇವರಾದ ಓ ಕರ್ತನೇ, ಎಷ್ಟರವರೆಗೆ ನಿನ್ನ ಜನರ ಪ್ರಾರ್ಥನೆಗೆ ವಿರೋಧವಾಗಿ ಕೋಪ ಗೊಳ್ಳುತ್ತೀ?
80:5b.PSA.080.005 ಕಣ್ಣೀರಿನ ರೊಟ್ಟಿಯನ್ನು ಅವರಿಗೆ ತಿನ್ನಿಸಿ, ದೊಡ್ಡ ಅಳತೆಯಿಂದ ಕಣ್ಣೀರನ್ನು ಕುಡಿಯಲು ಕೊಡುತ್ತೀ.
80:6b.PSA.080.006 ನಮ್ಮ ನೆರೆಯವರಿಗೆ ನೀನು ನಮ್ಮನ್ನು ವಿವಾದಕ್ಕೆ ಕಾರಣ ಮಾಡುತ್ತೀ; ನಮ್ಮ ಶತ್ರುಗಳು ತಮ್ಮಲ್ಲಿ ತಾವೇ ನಗುತ್ತಾರೆ.
80:7b.PSA.080.007 ಸೈನ್ಯಗಳ ಓ ದೇವರೇ, ನೀನು ನಮ್ಮನ್ನು ಮತ್ತೆ ತಿರಿಗಿಸಿ ನಿನ್ನ ಮುಖವನ್ನು ಪ್ರಕಾಶಿಸ ಮಾಡು; ಆಗ ನಾವು ರಕ್ಷಿಸಲ್ಪಡುವೆವು.
80:8b.PSA.080.008 ನೀನು ದ್ರಾಕ್ಷೇಗಿಡವನ್ನು ಐಗುಪ್ತದಿಂದ ತಂದಿ; ಜನಾಂಗಗಳನ್ನು ಹೊರಡಿಸಿ ಅದನ್ನು ನೆಟ್ಟಿ.
80:9b.PSA.080.009 ಅದರ ಮುಂದೆ ಸ್ಥಳ ಸಿದ್ಧಮಾಡಿದಿ; ಆಗ ಅದು ಬೇರೂರಿ ದೇಶವನ್ನು ತುಂಬಿತು.
80:10b.PSA.080.010 ಅದರ ನೆರಳಿನಿಂದ ಬೆಟ್ಟ ಗಳೂ ಕೊಂಬೆಗಳಿಂದ ದೇವದಾರುಗಳೂ ಮುಚ್ಚಲ್ಪ ಟ್ಟವು.
80:11b.PSA.080.011 ಅದು ತನ್ನ ರೆಂಬೆಗಳನ್ನು ಸಮುದ್ರದ ವರೆಗೂ ತನ್ನ ಬಳ್ಳಿಗಳನ್ನು ನದಿಗೂ ಹರಡಿಸಿತು.
80:12b.PSA.080.012 ಮಾರ್ಗ ದಲ್ಲಿ ಹಾದು ಹೋಗುವವರೆಲ್ಲರು ಅದನ್ನು ಕೀಳುವ ಹಾಗೆ ಯಾಕೆ ಅದರ ಬೇಲಿಗಳನ್ನು ನೀನು ಮುರಿದು ಬಿಟ್ಟಿದ್ದೀ?
80:13b.PSA.080.013 ಅಡವಿಯಿಂದ ಬಂದ ಹಂದಿಯು ಅದನ್ನು ಹಾಳುಮಾಡುತ್ತದೆ ಕಾಡಿನ ಮೃಗವು ಅದನ್ನು ಮೇಯ್ದು ಬಿಡುತ್ತದೆ.
80:14b.PSA.080.014 ಓ ಸೈನ್ಯಗಳ ದೇವರೇ, ತಿರುಗಿಕೋ ಎಂದು ನಾವು ನಿನ್ನನ್ನು ಬೇಡುತ್ತೇವೆ. ಆಕಾಶದಿಂದ ದೃಷ್ಟಿಸಿ ನೋಡು; ಈ ದ್ರಾಕ್ಷೇಗಿಡವನ್ನೂ
80:15b.PSA.080.015 ನಿನ್ನ ಬಲಗೈ ನೆಟ್ಟ ಸಸಿಯನ್ನೂ ನೀನು ನಿನಗೆ ಬಲಪಡಿಸಿ ಕೊಂಡ ಕೊಂಬೆಯನ್ನೂ ಪರಾಮರಿಸು.
80:16b.PSA.080.016 ಅದು ಈಗ ಕೊಯ್ಯಲ್ಪಟ್ಟು ಬೆಂಕಿಯಿಂದ ಸುಡಲ್ಪಟ್ಟಿದೆ; ನಿನ್ನ ಬಾಯಿ ಗದರಿಕೆಯಿಂದ ಅವರು ನಾಶವಾಗುತ್ತಾರೆ.
80:17b.PSA.080.017 ನಿನ್ನ ಬಲಗೈ ಮನುಷ್ಯನ ಮೇಲೆ ಹೌದು, ನೀನು ನಿನಗೆ ಬಲಪಡಿಸಿಕೊಂಡ ಮನುಷ್ಯ ಪುತ್ರನ ಮೇಲೆ ನಿನ್ನ ಕೈ ಇರಲಿ.
80:18b.PSA.080.018 ಆಗ ನಾವು ನಿನ್ನಿಂದ ಹಿಂದಿರು ಗುವದಿಲ್ಲ; ನಮ್ಮನ್ನು ಬದುಕಿಸು, ಆಗ ನಿನ್ನ ಹೆಸರನ್ನು ಕರೆಯುವೆವು.ಸೈನ್ಯಗಳ ದೇವರಾದ ಓ ಕರ್ತನೇ, ಮತ್ತೆ ನಮ್ಮನ್ನು ತಿರುಗಿಸಿ ನಿನ್ನ ಮುಖವನ್ನು ಪ್ರಕಾಶಿಸ ಮಾಡು; ಆಗ ನಾವು ರಕ್ಷಿಸಲ್ಪಡುವೆವು.
80:19b.PSA.080.019 ಸೈನ್ಯಗಳ ದೇವರಾದ ಓ ಕರ್ತನೇ, ಮತ್ತೆ ನಮ್ಮನ್ನು ತಿರುಗಿಸಿ ನಿನ್ನ ಮುಖವನ್ನು ಪ್ರಕಾಶಿಸ ಮಾಡು; ಆಗ ನಾವು ರಕ್ಷಿಸಲ್ಪಡುವೆವು.
81
81:1b.PSA.081.001 ನಮ್ಮ ಬಲವಾಗಿರುವ ದೇವರಿಗೆ ಗಟ್ಟಿಯಾದ ಧ್ವನಿಯಿಂದ ಹಾಡಿರಿ; ಯಾಕೋಬನ ದೇವರಿಗೆ ಜಯಧ್ವನಿಗೈಯಿರಿ.
81:2b.PSA.081.002 ಕೀರ್ತನೆಯನ್ನು ಎತ್ತಿರಿ; ದಮ್ಮಡಿಯನ್ನೂ ರಮ್ಯವಾದ ಕಿನ್ನರಿಯನ್ನೂ ವೀಣೆಯ ಸಂಗಡ ತನ್ನಿರಿ.
81:3b.PSA.081.003 ಅಮಾವಾಸ್ಯೆಯಲ್ಲಿಯೂ ನೇಮಕವಾದ ಪರಿಶುದ್ಧ ಹಬ್ಬದ ದಿವಸದಲ್ಲಿಯೂ ತುತೂರಿಯನ್ನು ಊದಿರಿ.
81:4b.PSA.081.004 ಅದು ಇಸ್ರಾಯೇಲಿಗೆ ಕಟ್ಟಳೆಯೇ; ಯಾಕೋಬನ ದೇವರ ನ್ಯಾಯಪ್ರಮಾಣವೇ;
81:5b.PSA.081.005 ನಾನು ತಿಳಿಯದ ಭಾಷೆಯನ್ನು ಕೇಳಿದ ಐಗುಪ್ತದೇಶದಲ್ಲೆಲ್ಲಾ ಆತನು ಹೊರಟಾಗ ಅದನ್ನು ಯೋಸೇಫನಲ್ಲಿ ಸಾಕ್ಷಿಯಾಗಿ ನೇಮಿಸಿದನು.
81:6b.PSA.081.006 ಅವನ ಹೆಗಲಿನಿಂದ ಹೊರೆಯನ್ನು ತೊಲಗಿಸಿದನು; ಅವನ ಕೈಗಳು ಪುಟ್ಟಿಗಳಿಂದ ಬಿಡುಗಡೆ ಹೊಂದಿದವು.
81:7b.PSA.081.007 ಇಕ್ಕಟ್ಟಿನಲ್ಲಿ ಕರೆದಿ; ಆಗ ನಾನು ನಿನ್ನನ್ನು ತಪ್ಪಿಸಿಬಿಟ್ಟೆನು; ಗುಡುಗಿನ ಮರೆಯಲ್ಲಿ ನಿನಗೆ ಉತ್ತರಕೊಟ್ಟು ಮೆರಿಬಾ ನೀರುಗಳ ಬಳಿಯಲ್ಲಿ ನಿನ್ನನ್ನು ಶೋಧಿಸಿದೆನು ಸೆಲಾ.
81:8b.PSA.081.008 ಓ ನನ್ನ ಜನರೇ, ಕೇಳಿರಿ; ಓ ಇಸ್ರಾಯೇಲೇ, ನೀನು ನನ್ನನ್ನು ಕೇಳಿದರೆ ನಾನು ನಿನಗೆ ಸಾಕ್ಷಿ ಕೊಡು ವೆನು.
81:9b.PSA.081.009 ನಿನ್ನಲ್ಲಿ ಅನ್ಯದೇವರು ಇರಬಾರದು; ಪರ ದೇವರಿಗೆ ಅಡ್ಡಬೀಳಬಾರದು.
81:10b.PSA.081.010 ಐಗುಪ್ತದೇಶದಿಂದ ನಿನ್ನನ್ನು ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ; ನಿನ್ನ ಬಾಯನ್ನು ಅಗಲವಾಗಿ ತೆರೆ; ಆಗ ನಾನು ಅದನ್ನು ತುಂಬಿಸುವೆನು.
81:11b.PSA.081.011 ಆದರೆ ನನ್ನ ಜನರು ನನ್ನ ಸ್ವರವನ್ನು ಕೇಳಲಿಲ್ಲ; ಇಸ್ರಾಯೇಲು ನನ್ನ ಮೇಲೆ ಮನಸ್ಸಿಡಲಿಲ್ಲ.
81:12b.PSA.081.012 ಆದದರಿಂದ ಅವರ ಹೃದಯದ ದುರಾಶೆಗೆ ಅವರನ್ನು ನಾನು ಒಪ್ಪಿಸಿದೆನು; ಅವರು ತಮ್ಮ ಆಲೋಚನೆಗಳಲ್ಲಿ ನಡೆದುಕೊಂಡರು.
81:13b.PSA.081.013 ಹಾ, ನನ್ನ ಜನರು ನನ್ನ ಮಾತನ್ನು ಕೇಳಿ, ಇಸ್ರಾಯೇಲು ನನ್ನ ಮಾರ್ಗದಲ್ಲಿ ನಡೆದುಕೊಂಡರೆ,
81:14b.PSA.081.014 ತೀವ್ರವಾಗಿ ಅವರ ಶತ್ರುಗಳನ್ನು ಅಣಗಿಸುವೆನು; ಅವರ ವೈರಿಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು.
81:15b.PSA.081.015 ಕರ್ತನನ್ನು ಹಗೆಮಾಡುವವರು ಆತನಿಗೆ ತಮ್ಮನ್ನು ತಾವೇ ಒಪ್ಪಿಸಿಕೊಟ್ಟಿದ್ದರೆ ಅವರ ಕಾಲವು ಎಂದೆಂದಿಗೂ ಇರುತ್ತಿತ್ತು.ಇದಲ್ಲದೆ ಆತನು ಉತ್ತಮವಾದ ಗೋಧಿ ಯಿಂದ ಅವರಿಗೆ ಊಟಕ್ಕೆ ಕೊಟ್ಟು ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವನು.
81:16b.PSA.081.016 ಇದಲ್ಲದೆ ಆತನು ಉತ್ತಮವಾದ ಗೋಧಿ ಯಿಂದ ಅವರಿಗೆ ಊಟಕ್ಕೆ ಕೊಟ್ಟು ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವನು.
82
82:1b.PSA.082.001 ದೇವರು ಬಲಶಾಲಿಗಳ ಮಧ್ಯದಲ್ಲಿ ನಿಂತು ದೇವರುಗಳಿಗೆ ನ್ಯಾಯತೀರಿಸುತ್ತಾನೆ.
82:2b.PSA.082.002 ಎಷ್ಟರ ವರೆಗೂ ಅನ್ಯಾಯವಾಗಿ ತೀರ್ಪುಮಾಡಿ ದುಷ್ಟ ರಿಗೆ ಮುಖದಾಕ್ಷಿಣ್ಯ ಮಾಡುವಿರಿ? ಸೆಲಾ.
82:3b.PSA.082.003 ದರಿದ್ರ ನನ್ನೂ ದಿಕ್ಕಿಲ್ಲದವನನ್ನೂ ಕಾಪಾಡಿ ದೀನನಿಗೂ ಬಡವ ನಿಗೂ ನೀತಿಯನ್ನು ಮಾಡಿರಿ.
82:4b.PSA.082.004 ದರಿದ್ರನನ್ನೂ ಬಡವ ನನ್ನೂ ದುಷ್ಟರ ಕೈಯಿಂದ ಬಿಡಿಸಿರಿ.
82:5b.PSA.082.005 ಅವರು ಅರಿಯರು; ಗ್ರಹಿಸುವದಿಲ್ಲ; ಕತ್ತಲೆಯಲ್ಲಿ ನಡೆದುಕೊಳ್ಳುತ್ತಾರೆ. ಭೂಮಿಯ ಅಸ್ತಿವಾರಗಳೆಲ್ಲಾ ಕ್ರಮವಿಲ್ಲದವುಗಳು.
82:6b.PSA.082.006 ನಾನು--ನೀವು ದೇವರುಗಳು; ನೀವೆಲ್ಲರು ಮಹೋನ್ನತನ ಮಕ್ಕಳು ಎಂದು ಹೇಳಿದೆನು.
82:7b.PSA.082.007 ಆದಾಗ್ಯೂ ಮನುಷ್ಯರ ಹಾಗೆ ನೀವು ಸಾಯುವಿರಿ; ಪ್ರಧಾನರಲ್ಲಿ ಒಬ್ಬನ ಹಾಗೆ ಬೀಳುವಿರಿ.ಓ ದೇವರೇ, ಏಳು; ಭೂಮಿಗೆ ನ್ಯಾಯತೀರಿಸು; ನೀನು ಜನಾಂಗಗಳನ್ನೆಲ್ಲಾ ಬಾಧ್ಯವಾಗಿ ಹೊಂದುವಿ.
82:8b.PSA.082.008 ಓ ದೇವರೇ, ಏಳು; ಭೂಮಿಗೆ ನ್ಯಾಯತೀರಿಸು; ನೀನು ಜನಾಂಗಗಳನ್ನೆಲ್ಲಾ ಬಾಧ್ಯವಾಗಿ ಹೊಂದುವಿ.
83
83:1b.PSA.083.001 ಓ ದೇವರೇ, ಮೌನವಾಗಿರಬೇಡ; ಓ ದೇವರೇ, ಮೌನವಾಗಿರಬೇಡ; ಸುಮ್ಮ ನಿರಬೇಡ.
83:2b.PSA.083.002 ಇಗೋ, ನಿನ್ನ ಶತ್ರುಗಳು ಗದ್ದಲ ಮಾಡು ತ್ತಾರೆ; ನಿನ್ನ ಹಗೆಯವರು ತಲೆ ಎತ್ತುತ್ತಾರೆ.
83:3b.PSA.083.003 ನಿನ್ನ ಜನರಿಗೆ ವಿರೋಧವಾಗಿ ಉಪಾಯದ ಯುಕ್ತಿಯನ್ನು ಕಲ್ಪಿಸುತ್ತಾರೆ. ನೀನು ಅಡಗಿಸಿಟ್ಟವರಿಗೆ ವಿರೋಧಿಗಳು ಆಲೋಚಿಸಿಕೊಳ್ಳುತ್ತಾರೆ.
83:4b.PSA.083.004 ಅವರು--ಬನ್ನಿರಿ, ಅವ ರನ್ನು ಜನಾಂಗವಾಗಿರದ ಹಾಗೆ ನಾವು ಅವರನ್ನು ನಿರ್ಮೂಲ ಮಾಡೋಣ; ಇಸ್ರಾಯೇಲಿನ ಹೆಸರು ಇನ್ನು ಜ್ಞಾಪಕಕ್ಕೆ ಬಾರದಿರಲಿ ಅನ್ನುತ್ತಾರೆ.
83:5b.PSA.083.005 ಅವರು ಕೂಡ ಏಕಮನಸ್ಸಾಗಿ ಆಲೋಚನೆ ಮಾಡಿಕೊಂಡಿ ದ್ದಾರೆ; ನಿನಗೆ ವಿರೋಧವಾಗಿ ಒಡಂಬಟ್ಟಿದ್ದಾರೆ.
83:6b.PSA.083.006 ಎದೋಮ್ಯರ ಮತ್ತು ಇಷ್ಮಾಯೇಲ್ಯರ ಗುಡಾರಗಳೂ ಮೋವಾಬೂ ಹಗ್ರೀಯರೂ
83:7b.PSA.083.007 ಗೆಬಾಲ್ಯರೂ ಅಮ್ಮೋನಿ ಯರೂ ಮಾಲೇಕ್ಯರೂ ತೂರಿನ ನಿವಾಸಿಗಳು ಸಹಿತವಾಗಿ ಫಿಲಿಷ್ಟಿಯರದೇ;
83:8b.PSA.083.008 ಅಶ್ಶೂರ್ಯರೂ ಸಹ ಅವ ರಲ್ಲಿ ಕೂಡಿಕೊಂಡು; ಅವರು ಲೋಟನ ಮಕ್ಕಳಿಗೆ ಸಹಾಯ ಮಾಡಿದ್ದಾರೆ ಸೆಲಾ.
83:9b.PSA.083.009 ಮಿದ್ಯಾನಿಗೂ ಸೀಸೆರನಿಗೂ ಯಾಬೀನನಿಗೂ ಕೀಷೋನ್ ಹಳ್ಳದಲ್ಲಿ ಮಾಡಿದ ಹಾಗೆ ಅವರಿಗೆ ಮಾಡು.
83:10b.PSA.083.010 ಇವರು ಎಂದೋರಿನಲ್ಲಿ ನಾಶವಾಗಿ ಭೂಮಿಗೆ ಗೊಬ್ಬರವಾದರು.
83:11b.PSA.083.011 ಅವರನ್ನೂ ಅವರ ಅಧಿಪತಿಗಳನ್ನೂ ಓರೇಬ್ ಜೇಬ್ ಹಾಗೆಯೂ ಅವರ ಪ್ರಮುಖರೆಲ್ಲರನ್ನು ಜೇಬಹ ಚಲ್ಮುನ್ನರ ಹಾಗೆಯೂ ಮಾಡು.
83:12b.PSA.083.012 ಅವರು--ನಾವು ದೇವರ ನಿವಾಸಗಳನ್ನು ಸ್ವತಂತ್ರಿಸಿಕೊಳ್ಳೋಣ ಅನ್ನುತ್ತಾರೆ.
83:13b.PSA.083.013 ಓ ನನ್ನ ದೇವರೇ, ಅವರನ್ನು ಚಕ್ರದ ಹಾಗೆಯೂ ಗಾಳಿಯ ಮುಂದಿರುವ ಕಸದ ಹಾಗೆಯೂ ಮಾಡು.
83:14b.PSA.083.014 ಕಾಡನ್ನು ಸುಡುವ ಬೆಂಕಿಯ ಹಾಗೆಯೂ ಬೆಟ್ಟಗಳನ್ನು ದಹಿಸುವ ಜ್ವಾಲೆಯ ಹಾಗೆಯೂ
83:15b.PSA.083.015 ನಿನ್ನ ಬಿರುಗಾಳಿಯಿಂದ ಅವರನ್ನು ಹಿಂಸಿಸಿ ನಿನ್ನ ಸುಳಿ ಗಾಳಿಯಿಂದ ಅವರನ್ನು ತಲ್ಲಣ ಪಡಿಸು.
83:16b.PSA.083.016 ಓ ಕರ್ತನೇ, ನಿನ್ನ ನಾಮವನ್ನು ಅವರು ಹುಡುಕುವ ಹಾಗೆ ಅವರ ಮುಖಗಳನ್ನು ನಾಚಿಕೆ ಯಿಂದ ತುಂಬಿಸು.
83:17b.PSA.083.017 ಅವರು ನಾಚಿಕೆಪಟ್ಟು ಎಂದೆಂ ದಿಗೂ ಕಳವಳಗೊಳ್ಳಲಿ; ಹೌದು, ಅವರು ಲಜ್ಜೆ ಯಿಂದ ನಾಶವಾಗಲಿ.ನೀನು ಮಾತ್ರ ಯೆಹೋವ ನೆಂಬ ಹೆಸರುಳ್ಳ ನೀನು ಸಮಸ್ತ ಭೂಮಿಯ ಮೇಲೆ ಮಹೋನ್ನತನಾಗಿದ್ದೀ ಎಂದು ತಿಳುಕೊಳ್ಳಲಿ.
83:18b.PSA.083.018 ನೀನು ಮಾತ್ರ ಯೆಹೋವ ನೆಂಬ ಹೆಸರುಳ್ಳ ನೀನು ಸಮಸ್ತ ಭೂಮಿಯ ಮೇಲೆ ಮಹೋನ್ನತನಾಗಿದ್ದೀ ಎಂದು ತಿಳುಕೊಳ್ಳಲಿ.
84
84:1b.PSA.084.001 ಸೈನ್ಯಗಳ ಓ ಕರ್ತನೇ, ನಿನ್ನ ನಿವಾಸಗಳು ಎಷ್ಟೋ ರಮ್ಯವಾಗಿವೆ!
84:2b.PSA.084.002 ಕರ್ತನ ಅಂಗಳ ಗಳಿಗಾಗಿ ನನ್ನ ಪ್ರಾಣವು ಬಯಸಿ, ಹೌದು, ಅದು ಕುಂದುತ್ತದೆ; ನನ್ನ ಹೃದಯವೂ ಶರೀರವೂ ಜೀವ ವುಳ್ಳ ದೇವರಿಗಾಗಿ ಕೂಗಿಕೊಳ್ಳುತ್ತದೆ.
84:3b.PSA.084.003 ಸೈನ್ಯಗಳ ಓ ಕರ್ತನೇ, ನನ್ನ ಅರಸನೇ, ನನ್ನ ದೇವರೇ, ಹೌದು ಗುಬ್ಬಿಯು ಮನೆಯನ್ನೂ ಬಾನಕ್ಕೀಯು ತನ್ನ ಮರಿಗ ಳನ್ನಿಡುವ ಗೂಡನ್ನೂ ನಿನ್ನ ಬಲಿಪೀಠಗಳ ಬಳಿಯಲ್ಲಿ ಕಂಡುಕೊಂಡವೆ.
84:4b.PSA.084.004 ನಿನ್ನ ಆಲಯದಲ್ಲಿ ವಾಸವಾಗಿ ರುವವರು ಭಾಗ್ಯವಂತರು; ಇನ್ನೂ ನಿನ್ನನ್ನು ಅವರು ಸ್ತುತಿಸುವರು ಸೆಲಾ.
84:5b.PSA.084.005 ಯಾರಿಗೆ ನೀನು ಬಲವಾಗಿ ದ್ದೀಯೋ ಆ ಮನುಷ್ಯನು ಭಾಗ್ಯವಂತನು; ಯಾರಲ್ಲಿ ಆತನ ಮಾರ್ಗಗಳು ಇವೆಯೋ ಅವನೇ ಧನ್ಯನು.
84:6b.PSA.084.006 ಬಾಕಾ ತಗ್ಗನ್ನು ದಾಟುವಾಗ ಅದನ್ನು ಬುಗ್ಗೆಯಾಗಿ ಮಾಡುತ್ತಾರೆ; ಮಳೆಯು ಕೊಳಗಳನ್ನು ತುಂಬುತ್ತದೆ.
84:7b.PSA.084.007 ಅವರು ಬಲದಿಂದ ಬಲಕ್ಕೆ ಹೋಗಿ, ಚೀಯೋನಿನಲ್ಲಿ ದೇವರ ಮುಂದೆ ಕಾಣಿಸಿಕೊಳ್ಳುತ್ತಾರೆ.
84:8b.PSA.084.008 ಸೈನ್ಯಗಳ ದೇವರಾದ ಓ ಕರ್ತನೇ, ನನ್ನ ಪ್ರಾರ್ಥನೆ ಯನ್ನು ಕೇಳು; ಯಾಕೋಬನ ಓ ದೇವರೇ, ಕಿವಿ ಗೊಡು ಸೆಲಾ.
84:9b.PSA.084.009 ನಮ್ಮ ಗುರಾಣಿಯಾಗಿರುವ ಓ ದೇವರೇ, ನೋಡು; ನಿನ್ನ ಅಭಿಷಿಕ್ತನ ಮುಖವನ್ನು ದೃಷ್ಟಿಸು.
84:10b.PSA.084.010 ಸಾವಿರ ದಿವಸಗಳಿಗಿಂತ ನಿನ್ನ ಅಂಗಳಗ ಳಲ್ಲಿ ಇರುವ ಒಂದು ದಿನವು ಒಳ್ಳೇದಾಗಿದೆ; ದುಷ್ಟರ ಗುಡಾರಗಳಲ್ಲಿ ವಾಸಮಾಡುವದಕ್ಕಿಂತ ನನ್ನ ದೇವರ ಆಲಯದ ಬಾಗಿಲನ್ನು ಕಾಯುವವನಾಗಿರುವದು ನನಗೆ ಒಳ್ಳೆಯದು.
84:11b.PSA.084.011 ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
84:12b.PSA.084.012 ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
85
85:1b.PSA.085.001 ಕರ್ತನೇ, ನಿನ್ನ ದೇಶಕ್ಕೆ ದಯೆತೋರಿಸಿದ್ದೀ; ಯಾಕೋಬನ್ನು ಸೆರೆಯಿಂದ ಹಿಂದಕ್ಕೆ ಬರ ಮಾಡಿದ್ದೀ.
85:2b.PSA.085.002 ನಿನ್ನ ಜನರ ಅಕ್ರಮವನ್ನು ಪರಿಹರಿಸಿದ್ದೀ; ಅವರ ಪಾಪವನ್ನೆಲ್ಲಾ ಮುಚ್ಚಿದ್ದೀ ಸೆಲಾ.
85:3b.PSA.085.003 ನಿನ್ನ ಕೋಪ ವನ್ನೆಲ್ಲಾ ನೀನು ತೆಗೆದುಬಿಟ್ಟಿದ್ದೀ; ನೀನು ಕೋಪದ ಉರಿಯಿಂದ ತಿರುಗಿಕೊಂಡಿದ್ದೀ.
85:4b.PSA.085.004 ನಮ್ಮ ರಕ್ಷಣೆಯ ಓ ದೇವರೇ, ನಮ್ಮ ಕಡೆಗೆ ತಿರುಗು; ನಮ್ಮ ಮೇಲಿರುವ ನಿನ್ನ ಕೋಪವನ್ನು ತೊಲ ಗಿಸು.
85:5b.PSA.085.005 ಎಂದೆಂದಿಗೂ ನಮ್ಮ ಮೇಲೆ ಕೋಪಿಸು ವಿಯೋ? ತಲತಲಾಂತರಕ್ಕೂ ನಿನ್ನ ಕೋಪವನ್ನು ಏಳ ಮಾಡುವಿಯೋ?
85:6b.PSA.085.006 ನಿನ್ನ ಜನರು ನಿನ್ನಲ್ಲಿ ಸಂತೋಷ ಪಡುವ ಹಾಗೆ ನೀನು ತಿರುಗಿ ನಮ್ಮನ್ನು ಉಜ್ಜೀವಿ ಸುವದಿಲ್ಲವೋ?
85:7b.PSA.085.007 ಓ ಕರ್ತನೇ, ನಿನ್ನ ಕರುಣೆಯನ್ನು ನಮಗೆ ದಯಪಾಲಿಸು. ನಿನ್ನ ರಕ್ಷಣೆಯನ್ನು ನಮಗೆ ಕೊಡು.
85:8b.PSA.085.008 ಕರ್ತನಾದ ದೇವರು ಏನು ಹೇಳುತ್ತಾನೋ ಅದನ್ನು ಕೇಳುವೆನು; ನಿಶ್ಚಯವಾಗಿ ಜನರಿಗೂ ತನ್ನ ಪರಿಶುದ್ಧ ರಿಗೂ ಸಮಾಧಾನದ ಮಾತು ಹೇಳುವನು; ಇನ್ನು ಬುದ್ಧಿಹೀನತ್ವಕ್ಕೆ ಅವರು ತಿರುಗಿಕೊಳ್ಳದೆ ಇರಲಿ.
85:9b.PSA.085.009 ನಿಶ್ಚ ಯವಾಗಿ ಘನವು ನಮ್ಮ ದೇಶದಲ್ಲಿ ವಾಸವಾಗಿರುವ ಹಾಗೆ, ಆತನಿಗೆ ಭಯಪಡುವವರಿಗೆ ಆತನ ರಕ್ಷಣೆಯು ಸವಿಾಪವಾಗಿದೆ.
85:10b.PSA.085.010 ಕೃಪೆಯೂ ಸತ್ಯವೂ ಸಂಧಿಸಿ ಕೊಳ್ಳುತ್ತವೆ; ನೀತಿಯೂ ಸಮಾಧಾನವೂ ಮುದ್ದಿಟ್ಟು ಕೊಳ್ಳುತ್ತವೆ.
85:11b.PSA.085.011 ಸತ್ಯವು ಭೂಮಿಯಿಂದ ಮೊಳೆಯು ವದು; ನೀತಿಯು ಆಕಾಶದಿಂದ ಕೆಳಗೆ ದೃಷ್ಟಿಸುವುದು.
85:12b.PSA.085.012 ಹೌದು, ಕರ್ತನು ಒಳ್ಳೇದನ್ನು ಮಾಡುವನು. ನಮ್ಮ ಭೂಮಿಯು ಅದರ ಬೆಳೆಯನ್ನು ಕೊಡುವದು.ನೀತಿಯು ಆತನ ಮುಂದೆ ಹೋಗುತ್ತಾ ನಾವು ಆತನ ಹೆಜ್ಜೆಗಳಲ್ಲಿ ನಡೆಯುವಂತೆ ಮಾರ್ಗವನ್ನು ಮಾಡುವದು.
85:13b.PSA.085.013 ನೀತಿಯು ಆತನ ಮುಂದೆ ಹೋಗುತ್ತಾ ನಾವು ಆತನ ಹೆಜ್ಜೆಗಳಲ್ಲಿ ನಡೆಯುವಂತೆ ಮಾರ್ಗವನ್ನು ಮಾಡುವದು.
86
86:1b.PSA.086.001 ಓ ಕರ್ತನೇ, ನೀನು ಕಿವಿಗೊಟ್ಟು ನನಗೆ ಉತ್ತರಕೊಡು; ನಾನು ದೀನನೂ ಬಡ ವನೂ ಆಗಿದ್ದೇನೆ.
86:2b.PSA.086.002 ನನ್ನ ಪ್ರಾಣವನ್ನು ಕಾಪಾಡು; ನಾನು ಪರಿಶುದ್ಧನು. ನನ್ನ ದೇವರಾದ ನೀನೇ, ನಿನ್ನಲ್ಲಿ ಭರವಸವಿಡುವ ನಿನ್ನ ಸೇವಕನನ್ನು ರಕ್ಷಿಸು.
86:3b.PSA.086.003 ಓ ಕರ್ತನೇ, ನನ್ನನ್ನು ಕರುಣಿಸು; ದಿನವೆಲ್ಲಾ ನಿನಗೆ ಕೂಗು ತ್ತೇನೆ.
86:4b.PSA.086.004 ಓ ಕರ್ತನೇ, ನಿನ್ನ ಸೇವಕನ ಪ್ರಾಣವನ್ನು ಸಂತೋಷಪಡಿಸು; ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ.
86:5b.PSA.086.005 ಕರ್ತನೇ, ನೀನು ಒಳ್ಳೆಯವನೂ ಕ್ಷಮಿಸುವದಕ್ಕೆ ಸಿದ್ಧನೂ ಆಗಿದ್ದೀ; ನಿನಗೆ ಮೊರೆಯಿಡುವವರೆಲ್ಲರಿಗೆ ಬಹು ಕೃಪೆಯುಳ್ಳವನೂ ಆಗಿದ್ದೀ.
86:6b.PSA.086.006 ಓ ಕರ್ತನೇ, ನನ್ನ ಪ್ರಾರ್ಥನೆಗೆ ಕಿವಿಗೊಡು; ನನ್ನ ವಿಜ್ಞಾಪನೆಗಳ ಸ್ವರವನ್ನು ಆಲೈಸು.
86:7b.PSA.086.007 ನನ್ನ ಇಕ್ಕಟ್ಟಿನ ದಿವಸದಲ್ಲಿ ನಿನ್ನನ್ನು ಕರೆಯುವೆನು; ನೀನು ನನಗೆ ಉತ್ತರ ಕೊಡುವಿ.
86:8b.PSA.086.008 ಕರ್ತನೇ, ದೇವರುಗಳಲ್ಲಿ ನಿನ್ನ ಹಾಗೆ ಒಬ್ಬನೂ ಇಲ್ಲ; ನಿನ್ನ ಕೆಲಸಗಳ ಹಾಗೆ ಒಂದೂ ಇಲ್ಲ.
86:9b.PSA.086.009 ಓ ಕರ್ತನೇ, ನೀನು ಉಂಟುಮಾಡಿದ ಜನಾಂಗಗಳೆಲ್ಲಾ ಬಂದು ನಿನ್ನನ್ನು ಆರಾಧಿಸಿ ನಿನ್ನ ಹೆಸರನ್ನು ಘನಪಡಿ ಸುವರು.
86:10b.PSA.086.010 ನೀನು ದೊಡ್ಡವನೂ ಅದ್ಭುತಗಳನ್ನು ಮಾಡುವಾತನೂ ಆಗಿದ್ದೀ; ನೀನೊಬ್ಬನೇ ದೇವರು.
86:11b.PSA.086.011 ಓ ಕರ್ತನೆ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನಿನ್ನ ಸತ್ಯದಲ್ಲಿ ನಡೆದುಕೊಳ್ಳುವೆನು; ನಿನ್ನ ಹೆಸರಿಗೆ ಭಯಪಡುವ ಹಾಗೆ ನನ್ನ ಹೃದಯವನ್ನು ಐಕ್ಯಪಡಿಸು.
86:12b.PSA.086.012 ನನ್ನ ದೇವರಾದ ಓ ಕರ್ತನೇ, ನನ್ನ ಪೂರ್ಣ ಹೃದಯದಿಂದ ನಿನ್ನನ್ನು ಕೊಂಡಾಡುವೆನು; ನಿನ್ನ ಹೆಸರನ್ನು ಯುಗಯುಗಕ್ಕೂ ಘನಪಡಿಸುವೆನು.
86:13b.PSA.086.013 ನಿನ್ನ ಕರುಣೆಯು ನನ್ನ ಮೇಲೆ ದೊಡ್ಡದಾಗಿದೆ; ಪಾತಾಳ ದೊಳಗಿಂದ ನನ್ನ ಪ್ರಾಣವನ್ನು ಬಿಡಿಸಿದ್ದೀ.
86:14b.PSA.086.014 ಓ ದೇವರೇ, ಅಹಂಕಾರಿಗಳು ನನಗೆ ವಿರೋಧ ವಾಗಿ ಎದ್ದಿದ್ದಾರೆ; ಬಲಿಷ್ಠರ ಕೂಟವು ನನ್ನ ಪ್ರಾಣ ವನ್ನು ಹುಡುಕುತ್ತದೆ; ಅವರು ನಿನ್ನನ್ನು ಲಕ್ಷಿಸಲಿಲ್ಲ.
86:15b.PSA.086.015 ಆದರೆ ನೀನು ಓ ಕರ್ತನೇ, ಅಂತಃಕರುಣೆಯೂ ದಯೆಯೂ ಉಳ್ಳ ದೇವರು ದೀರ್ಘಶಾಂತನೂ ಬಹಳ ಕೃಪೆಯೂ ಸತ್ಯವೂ ಉಳ್ಳವನೂ ಆಗಿದ್ದೀ.
86:16b.PSA.086.016 ನನ್ನ ಕಡೆಗೆ ತಿರಿಗಿಕೊಂಡು ನನ್ನನ್ನು ಕರುಣಿಸು; ನಿನ್ನ ಸೇವಕನಿಗೆ ನಿನ್ನ ಬಲವನ್ನು ಕೊಡು; ನಿನ್ನ ದಾಸಿಯ ಮಗನನ್ನು ರಕ್ಷಿಸು.ಒಳ್ಳೇದಕ್ಕಾಗಿ ನನಗೆ ಒಂದು ಗುರುತು ಕೊಡು; ಆಗ ನನ್ನ ಹಗೆಮಾಡುವವರು ನೋಡಿ, ನಾಚಿಕೆಪಡುವರು; ಕರ್ತನೇ, ನೀನು ನನಗೆ ಸಹಾಯ ಮಾಡಿ ನನ್ನನ್ನು ಆದರಿಸಿದ್ದೀ.
86:17b.PSA.086.017 ಒಳ್ಳೇದಕ್ಕಾಗಿ ನನಗೆ ಒಂದು ಗುರುತು ಕೊಡು; ಆಗ ನನ್ನ ಹಗೆಮಾಡುವವರು ನೋಡಿ, ನಾಚಿಕೆಪಡುವರು; ಕರ್ತನೇ, ನೀನು ನನಗೆ ಸಹಾಯ ಮಾಡಿ ನನ್ನನ್ನು ಆದರಿಸಿದ್ದೀ.
87
87:1b.PSA.087.001 ಆತನ ಅಸ್ತಿವಾರವು ಪರಿಶುದ್ಧ ಪರ್ವತಗಳಲ್ಲಿ ಅದೆ.
87:2b.PSA.087.002 ಕರ್ತನು ಚಿಯೋನಿನ ಬಾಗಲುಗಳನ್ನು ಯಾಕೋಬನ ಎಲ್ಲಾ ನಿವಾಸಗಳಿ ಗಿಂತ ಪ್ರೀತಿಮಾಡುತ್ತಾನೆ.
87:3b.PSA.087.003 ದೇವರ ಪಟ್ಟಣವೇ, ನಿನ್ನ ವಿಷಯವಾಗಿ ಘನವುಳ್ಳವುಗಳು ಹೇಳಲ್ಪಟ್ಟಿವೆ.
87:4b.PSA.087.004 ರಾಹಬನ್ನೂ ಬಾಬೆಲನ್ನೂ ನನ್ನನ್ನು ತಿಳಿದವರಿಗೆ ಜ್ಞಾಪಕಮಾಡುವೆನು; ಫಿಲಿಷ್ಟಿಯವೂ ತೂರಿನ ಸಂಗಡ ಕೂಷನ್ನೂ ನೋಡು: ಈ ಮನುಷ್ಯನು ಅಲ್ಲಿ ಹುಟ್ಟಿ ದನು.
87:5b.PSA.087.005 ಚೀಯೋನಿನ ವಿಷಯ ಹೇಳುವದೇನಂದರೆ --ಇಂಥಿಂಥವರು ಅದರಲ್ಲಿ ಹುಟ್ಟಿದರೆಂದೂ ಮಹೋ ನ್ನತನು ತಾನೇ ಅದನ್ನು ಸ್ಥಾಪಿಸುವನು.
87:6b.PSA.087.006 ಕರ್ತನು ಜನಸಂಖ್ಯೆ ಬರೆಯುವಾಗ ಇವನು ಅಲ್ಲಿ ಹುಟ್ಟಿದ ನೆಂದು ಎಣಿಸುವನು ಸೆಲಾ.ಹಾಡುವವರೂ ವಾದ್ಯ ಗಳನ್ನು ಬಾರಿಸುವವರೂ ಇದ್ದಾರೆ; ನನ್ನ ಬುಗ್ಗೆಗಳೆಲ್ಲಾ ನಿನ್ನಲ್ಲಿಯೇ.
87:7b.PSA.087.007 ಹಾಡುವವರೂ ವಾದ್ಯ ಗಳನ್ನು ಬಾರಿಸುವವರೂ ಇದ್ದಾರೆ; ನನ್ನ ಬುಗ್ಗೆಗಳೆಲ್ಲಾ ನಿನ್ನಲ್ಲಿಯೇ.
88
88:1b.PSA.088.001 ನನ್ನ ರಕ್ಷಣೆಯ ದೇವರಾದ ಓ ಕರ್ತನೇ, ಹಗಲಿರುಳು ನಿನ್ನ ಮುಂದೆ ಕೂಗುತ್ತೇನೆ.
88:2b.PSA.088.002 ನನ್ನ ಪ್ರಾರ್ಥನೆಯು ನಿನ್ನ ಮುಂದೆ ಬರಲಿ; ನನ್ನ ಮೊರೆಗೆ ನೀನು ಕಿವಿಗೊಡು.
88:3b.PSA.088.003 ನನ್ನ ಜೀವವು ಕಷ್ಟ ಗಳಿಂದ ತುಂಬಿಯದೆ, ನನ್ನ ಪ್ರಾಣವು ಸಮಾಧಿಗೆ ಸವಿಾಪವಾಗಿದೆ.
88:4b.PSA.088.004 ಕುಣಿಗೆ ಇಳಿಯುವವರ ಸಂಗಡ ಎಣಿಸಲ್ಪಟ್ಟಿದ್ದೇನೆ; ಬಲವಿಲ್ಲದ ಮನುಷ್ಯನ ಹಾಗಿದ್ದೇನೆ.
88:5b.PSA.088.005 ಕೊಲ್ಲಲ್ಪಟ್ಟು ಸಮಾಧಿಯಲ್ಲಿ ಮಲಗಿರುವವರನ್ನು ನೀನು ಇನ್ನು ಜ್ಞಾಪಕಮಾಡಿಕೊಳ್ಳದ ಹಾಗೆ ಸತ್ತವ ರಲ್ಲಿ ಬಿಡಲ್ಪಟ್ಟಿದ್ದೇನೆ; ಅವರು ನಿನ್ನ ಕೈಯಿಂದ ಕಡಿ ಯಲ್ಪಟ್ಟಿದ್ದಾರೆ.
88:6b.PSA.088.006 ಕೆಳಗಿನ ಆಳವಾದ ಕುಣಿಯಲ್ಲಿಯೂ ಕತ್ತಲೆಯಲ್ಲಿಯೂ ಅಗಾಧಗಳಲ್ಲಿಯೂ ನನ್ನನ್ನು ಇಟ್ಟಿದ್ದಿ.
88:7b.PSA.088.007 ನಿನ್ನ ಕೋಪವು ನನ್ನ ಮೇಲೆ ನೆಲೆಯಾಗಿದೆ; ನಿನ್ನ ಅಲೆಗಳಿಂದೆಲ್ಲಾ ನನ್ನನ್ನು ಕುಂದಿ ಸಿದ್ದೀ ಸೆಲಾ.
88:8b.PSA.088.008 ನನ್ನ ಪರಿಚಿತರನ್ನು ನನಗೆ ದೂರಮಾಡಿದ್ದೀ; ನನ್ನನ್ನು ಅವ ರಿಗೆ ಅಸಹ್ಯ ಮಾಡಿದ್ದೀ; ಮುಚ್ಚಲ್ಪಟ್ಟಿದ್ದೇನೆ, ಹೊರಗೆ ಬರಲಾರೆನು.
88:9b.PSA.088.009 ಬಾಧೆಯ ದೆಸೆಯಿಂದ ನನ್ನ ಕಣ್ಣು ದುಃಖಿಸುತ್ತದೆ. ಕರ್ತನೇ, ದಿನವೆಲ್ಲಾ ನಿನ್ನನ್ನು ಕರೆಯು ತ್ತೇನೆ; ನಾನು ನಿನ್ನ ಕಡೆಗೆ ನನ್ನ ಕೈಗಳನ್ನು ಚಾಚುತ್ತೇನೆ.
88:10b.PSA.088.010 ಸತ್ತವರಿಗೆ ಅದ್ಭುತಗಳನ್ನು ತೋರಿಸುವಿಯೋ? ಸತ್ತವರು ಎದ್ದು ನಿನ್ನನ್ನು ಕೊಂಡಾಡುವರೋ? ಸೆಲಾ.
88:11b.PSA.088.011 ಸಮಾಧಿಯಲ್ಲಿ ನಿನ್ನ ಪ್ರೀತಿ ಕರುಣೆಯು ಇಲ್ಲವೆ ನಾಶನ ಸ್ಥಳದಲ್ಲಿ ನಿನ್ನ ನಂಬಿಗಸ್ತಿಕೆಯು ಸಾರಲ್ಪಡುವವೋ?
88:12b.PSA.088.012 ಕತ್ತಲೆಯಲ್ಲಿ ನಿನ್ನ ಅದ್ಭುತಗಳೂ ಮರೆ ಯುವ ದೇಶದಲ್ಲಿ ನಿನ್ನ ನೀತಿಯೂ ತಿಳಿಯಲ್ಪಡು ವದೋ?
88:13b.PSA.088.013 ಆದರೆ ನಾನು ಓ ಕರ್ತನೇ, ನಿನ್ನ ಕಡೆಗೆ ಮೊರೆಯಿಡುತ್ತೇನೆ. ಹೊತ್ತಾರೆ ನನ್ನ ಪ್ರಾರ್ಥ ನೆಯು ನಿನ್ನನ್ನು ಎದುರುಗೊಳ್ಳುವದು.
88:14b.PSA.088.014 ಕರ್ತನೇ,ಯಾಕೆ ನನ್ನ ಪ್ರಾಣವನ್ನು ತೊರೆದು ಬಿಡುತ್ತೀ?ಯಾಕೆ ನಿನ್ನ ಮುಖವನ್ನು ನನಗೆ ಮರೆಮಾಡುತ್ತೀ?
88:15b.PSA.088.015 ನಾನು ಕುಂದಿದವನೂ ಯೌವನದಾರಭ್ಯ ಸಾಯು ವದಕ್ಕೆ ಸಿದ್ಧನೂ ಆಗಿದ್ದೇನೆ. ನಿನ್ನ ಬೆದರಿಕೆಗಳನ್ನು ನಾನು ತಾಳುತ್ತಾ ಭ್ರಮೆಗೊಳ್ಳುತ್ತೇನೆ.
88:16b.PSA.088.016 ನನ್ನ ಮೇಲೆ ನಿನ್ನ ಕೋಪಾಗ್ನಿಯು ದಾಟುವದು. ನಿನ್ನ ಹೆದರಿಕೆಗಳು ನನ್ನನ್ನು ಸಂಹರಿಸುತ್ತವೆ.
88:17b.PSA.088.017 ನೀರಿನ ಹಾಗೆ ಅವು ಬಂದು ನನ್ನನ್ನು ದಿನವೆಲ್ಲಾ ಸುತ್ತಿಕೊಂಡಿವೆ; ಏಕವಾಗಿ ನನ್ನನ್ನು ಮುತ್ತಿಕೊಂಡಿವೆ.ಪ್ರಿಯನನ್ನೂ ಸ್ನೇಹಿತನನೂ ನನಗೆ ದೂರ ಮಾಡಿದ್ದೀ; ನನ್ನ ಕತ್ತಲೆಯ ಸ್ಥಳವೇ ನನ್ನ ಪರಿಚಿತರು.
88:18b.PSA.088.018 ಪ್ರಿಯನನ್ನೂ ಸ್ನೇಹಿತನನೂ ನನಗೆ ದೂರ ಮಾಡಿದ್ದೀ; ನನ್ನ ಕತ್ತಲೆಯ ಸ್ಥಳವೇ ನನ್ನ ಪರಿಚಿತರು.
89
89:1b.PSA.089.001 ಕರ್ತನ ಕರುಣೆಗಳನ್ನು ಯುಗಯುಗಕ್ಕೂ ಹಾಡುವೆನು; ತಲತಲಾಂತರಕ್ಕೂ ನಿನ್ನ ನಂಬಿಗಸ್ತಿಕೆಯನ್ನು ನನ್ನ ಬಾಯಿಂದ ತಿಳಿಯಪಡಿ ಸುವೆನು.
89:2b.PSA.089.002 ಎಂದೆಂದಿಗೂ ಕರುಣೆಯು ಸ್ಥಾಪಿಸಲ್ಪಡು ವದು; ಆಕಾಶಗಳಲ್ಲಿಯೂ ನಿನ್ನ ನಂಬಿಗಸ್ತಿಕೆಯನ್ನು ಸ್ಥಿರಪಡಿಸುವಿ ಎಂದು ಹೇಳಿದ್ದೇನೆ.
89:3b.PSA.089.003 ನಾನು ಆದು ಕೊಂಡವನೊಂದಿಗೆ ಒಡಂಬಡಿಕೆ ಮಾಡಿದ್ದೇನೆ; ನನ್ನ ಸೇವಕನಾದ ದಾವೀದನಿಗೆ ಆಣೆ ಇಟ್ಟು ಹೇಳಿದ್ದೇ ನಂದರೆ--
89:4b.PSA.089.004 ಎಂದೆಂದಿಗೂ ನಿನ್ನ ಸಂತತಿಯನ್ನು ಸ್ಥಿರ ಪಡಿಸುವೆನು; ತಲತಲಾಂತರಕ್ಕೂ ನಿನ್ನ ಸಿಂಹಾಸನವನ್ನು ಕಟ್ಟುವೆನು ಸೆಲಾ.
89:5b.PSA.089.005 ಇದಲ್ಲದೆ, ಆಕಾಶಗಳು ಓ ಕರ್ತನೇ, ನಿನ್ನ ಅದ್ಭುತಗಳನ್ನು ಪರಿಶುದ್ಧರ ಸಭೆಯಲ್ಲಿ ನಿನ್ನ ನಂಬಿಗಸ್ತಿಕೆಯನ್ನು ಸಹ ಕೊಂಡಾಡುವವು.
89:6b.PSA.089.006 ಪರ ಲೋಕದಲ್ಲಿ ಕರ್ತನಿಗೆ ಸಮಾನವಾದವನು ಯಾರು? ಪರಾಕ್ರಮಶಾಲಿಗಳ ಮಕ್ಕಳಲ್ಲಿ ಕರ್ತನಿಗೆ ಸಮಾನನಾದವನು ಯಾರು?
89:7b.PSA.089.007 ದೇವರು ಪರಿಶುದ್ಧರ ಸಭೆಯಲ್ಲಿ ಬಹಳ ಭೀಕರನೂ ತನ್ನ ಸುತ್ತಲಿರುವವರೆಲ್ಲರಿಗೆ ಭಯಂ ಕರನೂ ಆಗಿದ್ದಾನೆ.
89:8b.PSA.089.008 ಸೈನ್ಯಗಳ ದೇವರಾದ ಕರ್ತನೇ, ನಿನ್ನ ಹಾಗೆ ಶಕ್ತನಾದ ಕರ್ತನು ಯಾರು? ಇಲ್ಲವೆ ನಿನ್ನ ನಂಬಿಗಸ್ತಿಕೆಯು ನಿನ್ನ ಸುತ್ತಲೂ ಅದೆ.
89:9b.PSA.089.009 ನೀನು ಸಮುದ್ರದ ಉಬ್ಬರವನ್ನು ಆಳುತ್ತೀ; ಅದರ ತೆರೆಗಳು ಏಳುವಾಗ ಅವುಗಳನ್ನು ಸುಮ್ಮನಿರಿಸುತ್ತೀ.
89:10b.PSA.089.010 ಕೊಲ್ಲ ಲ್ಪಟ್ಟ ಒಬ್ಬನಂತೆ ನೀನು ರಾಹಬನ್ನು ತುಂಡಾಗುವಂತೆ ಒಡೆದಿದ್ದೀ. ನಿನ್ನ ಬಲದ ತೋಳಿನಿಂದ ನಿನ್ನ ಶತ್ರು ಗಳನ್ನು ಚದರಿಸಿ ಬಿಟ್ಟಿದ್ದೀ.
89:11b.PSA.089.011 ಆಕಾಶಗಳು ನಿನ್ನವು; ಭೂಮಿಯು ಸಹ ನಿನ್ನದು; ಲೋಕವನ್ನೂ ಅದರ ಪೂರ್ಣತೆಯನ್ನೂ ನೀನು ಉಂಟುಮಾಡಿದ್ದೀ.
89:12b.PSA.089.012 ಉತ್ತರವನ್ನೂ ದಕ್ಷಿಣವನ್ನೂ ನೀನೇ ನಿರ್ಮಿಸಿದ್ದೀ; ತಾಬೋರೂ ಹೆರ್ಮೋನೂ ನಿನ್ನ ಹೆಸರಿನಲ್ಲಿ ಉತ್ಸಾಹ ಧ್ವನಿಗೈಯುತ್ತವೆ.
89:13b.PSA.089.013 ನಿನಗೆ ಪರಾಕ್ರಮವುಳ್ಳ ತೋಳು ಉಂಟು; ಕೈ ಬಲವುಳ್ಳದ್ದು. ನಿನ್ನ ಬಲಗೈ ಉನ್ನತವಾ ದದ್ದು.
89:14b.PSA.089.014 ನೀತಿಯೂ ನ್ಯಾಯವೂ ನಿನ್ನ ಸಿಂಹಾಸನದ ಸ್ಥಳವಾಗಿದೆ ಕೃಪೆಯೂ ಸತ್ಯವೂ ನಿನ್ನ ಮುಂದೆ ಹೋಗುತ್ತವೆ;
89:15b.PSA.089.015 ಉತ್ಸಾಹ ಧ್ವನಿಯನ್ನು ತಿಳಿದ ಜನರು ಧನ್ಯರು; ಕರ್ತನೇ, ನಿನ್ನ ಮುಖದ ಬೆಳಕಿನಲ್ಲಿ ಅವರು ನಡೆದುಕೊಳ್ಳುವರು.
89:16b.PSA.089.016 ನಿನ್ನ ಹೆಸರಿನಿಂದ ದಿನವೆಲ್ಲಾ ಉಲ್ಲಾಸಪಟ್ಟು ನಿನ್ನ ನೀತಿಯಲ್ಲಿ ಅವರು ಉನ್ನತಕ್ಕೇರು ವರು.
89:17b.PSA.089.017 ಅವರ ಬಲದ ಮಹಿಮೆಯು ನೀನೇ ಮತ್ತು ನಿನ್ನ ಕಟಾಕ್ಷದಿಂದ ನಮ್ಮ ಕೊಂಬು ಉನ್ನತವಾಗುವದು.
89:18b.PSA.089.018 ನಮ್ಮ ಗುರಾಣಿಯು ಕರ್ತನೇ; ನಮ್ಮ ಅರಸನು ಇಸ್ರಾಯೇಲಿನ ಪರಿಶುದ್ಧನೇ.
89:19b.PSA.089.019 ಆಗ ದರ್ಶನದಲ್ಲಿ ನಿನ್ನ ಪರಿಶುದ್ಧನ ಸಂಗಡ ಮಾತಾಡಿ ಹೇಳಿದ್ದೇನಂದರೆ --ಪರಾಕ್ರಮಶಾಲಿಯ ಮೇಲೆ ಸಹಾಯವನ್ನು ಇಟ್ಟಿ ದ್ದೇನೆ. ಆಯಲ್ಪಟ್ಟವನನ್ನು ಜನರೊಳಗಿಂದ ಉನ್ನತಕ್ಕೇರಿ ಸಿದ್ದೇನೆ.
89:20b.PSA.089.020 ನನ್ನ ಸೇವಕನಾದ ದಾವೀದನನ್ನು ಕಂಡು ಕೊಂಡಿದ್ದೇನೆ; ನನ್ನ ಪರಿಶುದ್ಧ ಎಣ್ಣೆಯಿಂದ ಅವನನ್ನು ಅಭಿಷೇಕಿಸಿದ್ದೇನೆ.
89:21b.PSA.089.021 ಅವನ ಸಂಗಡಲೇ ನನ್ನ ಕೈ ಸ್ಥಿರವಾಗಿರುವದು; ನನ್ನ ತೋಳು ಅವನನ್ನು ಬಲಪಡಿಸು ವುದು.
89:22b.PSA.089.022 ಶತ್ರುವು ಅವನನ್ನು ಬಲಾತ್ಕಾರ ಮಾಡನು; ಯಾವ ದುಷ್ಟನೂ ಅವನನ್ನು ಹಿಂಸೆ ಪಡಿಸನು.
89:23b.PSA.089.023 ಇದ ಲ್ಲದೆ ಅವನ ಮುಂದೆ ವೈರಿಗಳನ್ನು ಹೊಡೆದು ಬಿಡು ವೆನು; ಅವನ ಹಗೆಯವರನ್ನು ಸಂಕಟಪಡಿಸುವೆನು.
89:24b.PSA.089.024 ಆದರೆ ನನ್ನ ನಂಬಿಗಸ್ತಿಕೆಯೂ ಕರುಣೆಯೂ ಅವನ ಸಂಗಡ ಇರುವವು. ನನ್ನ ಹೆಸರಿನಲ್ಲಿ ಅವನ ಕೊಂಬು ಉನ್ನತವಾಗುವದು.
89:25b.PSA.089.025 ಸಮುದ್ರದಲ್ಲಿ ಅವನ ಕೈ ಯನ್ನೂ ನದಿಗಳಲ್ಲಿ ಅವನ ಬಲಗೈಯನ್ನೂ ಇರಿಸು ವೆನು.
89:26b.PSA.089.026 ಅವನು--ನೀನು ನನ್ನ ತಂದೆಯೂ ದೇವರೂ ರಕ್ಷಣೆಯ ಬಂಡೆಯೂ ಎಂದು ನನಗೆ ಮೊರೆಯಿಡು ವನು.
89:27b.PSA.089.027 ನಾನು ಅವನನ್ನು ನನ್ನ ಚೊಚ್ಚಲ ಮಗನ ನ್ನಾಗಿಯೂ ಭೂಮಿಯ ಅರಸರಿಗಿಂತ ಉನ್ನತನನ್ನಾ ಗಿಯೂ ಮಾಡುವೆನು.
89:28b.PSA.089.028 ಎಂದೆಂದಿಗೂ ಅವನಿಗೋ ಸ್ಕರ ನನ್ನ ಕರುಣೆಯನ್ನು ಕಾದಿಡುವೆನು. ನನ್ನ ಒಡಂಬಡಿಕೆಯು ಅವನೊಂದಿಗೆ ದೃಢವಾಗಿರುವದು.
89:29b.PSA.089.029 ಅವನ ಸಂತತಿ ಯನ್ನು ಸಹ ಎಂದೆಂದಿಗೂ ಅವನ ಸಿಂಹಾಸನವನ್ನು ಆಕಾಶದ ದಿವಸಗಳ ಹಾಗೆಯೂ ಮಾಡುವೆನು.
89:30b.PSA.089.030 ಅವನ ಮಕ್ಕಳು ನನ್ನ ನ್ಯಾಯ ಪ್ರಮಾಣವನ್ನು ಬಿಟ್ಟು, ನನ್ನ ನ್ಯಾಯಗಳಲ್ಲಿ ನಡೆಯದೇ ಹೋದರೆ,
89:31b.PSA.089.031 ಅವರು ನನ್ನ ನೇಮಕಗಳನ್ನು ಮುರಿದು ನನ್ನ ಆಜ್ಞೆಗಳನ್ನು ಕೈಕೊಳ್ಳದೇ ಹೋದರೆ,
89:32b.PSA.089.032 ಕೋಲಿ ನಿಂದ ಅವರ ದ್ರೋಹವನ್ನೂ ಪೆಟ್ಟುಗಳಿಂದ ಅವರ ಅಕ್ರಮವನ್ನೂ ದಂಡಿಸುವೆನು.
89:33b.PSA.089.033 ಆದಾಗ್ಯೂ ನನ್ನ ಪ್ರೀತಿ ಕರುಣೆಯನ್ನು ಅವನಿಂದ ಸಂಪೂರ್ಣವಾಗಿ ತೊಲಗಿಸೆನು; ಇಲ್ಲವೇ ನನ್ನ ನಂಬಿಗಸ್ತಿಕೆಯನ್ನು ವ್ಯರ್ಥ ಮಾಡೆನು.
89:34b.PSA.089.034 ನನ್ನ ಒಡಂಬಡಿಕೆಯನ್ನು ನಾನು ಮುರಿ ಯೆನು; ಇಲ್ಲವೆ ನನ್ನ ತುಟಿಗಳಿಂದ ಹೊರಟದ್ದನ್ನು ಬದಲಾಯಿಸೆನು.
89:35b.PSA.089.035 ಒಂದು ಸಾರಿ ನನ್ನ ಪರಿಶುದ್ಧತ್ವ ದಿಂದ ಆಣೆಯಿಟ್ಟು ಹೇಳಿದ್ದೇನೆ; ದಾವೀದನಿಗೆ ಸುಳ್ಳಾ ಡೆನು.
89:36b.PSA.089.036 ಅವನ ಸಂತತಿಯು ಯುಗ ಯುಗಕ್ಕೂ ಅವನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವದು.
89:37b.PSA.089.037 ಚಂದ್ರನ ಹಾಗೆ ಅದು ಯುಗಯುಗಕ್ಕೂ, ಸ್ಥಿರವಾಗಿರುವದು; ಪರಲೋಕದಲ್ಲಿ ರುವ ಸಾಕ್ಷಿಯ ಹಾಗೆ ನಂಬಿಕೆ ಯುಳ್ಳದ್ದಾಗಿರುವದು ಸೆಲಾ.
89:38b.PSA.089.038 ಆದರೆ ನೀನು ಅಸಹ್ಯಿಸಿಬಿಟ್ಟು ತಿರಸ್ಕರಿಸಿ ನಿನ್ನ ಅಭಿಷಕ್ತನ ಮೇಲೆ ಉಗ್ರನಾದಿ;
89:39b.PSA.089.039 ನಿನ್ನ ಸೇವಕನ ಒಡಂಬಡಿಕೆಯನ್ನು ಅಸಡ್ಡೆಮಾಡಿ, ಅವನ ಕಿರೀಟವನ್ನು ನೆಲಕ್ಕೆ ಹಾಕಿ ಹೊಲೆ ಮಾಡಿದ್ದೀ.
89:40b.PSA.089.040 ಅವನ ಬೇಲಿಗಳ ನ್ನೆಲ್ಲಾ ಮುರಿದು ಅವನ ಕೋಟೆಗಳನ್ನು ಹಾಳು ಮಾಡಿದ್ದೀ.
89:41b.PSA.089.041 ಮಾರ್ಗಸ್ಥರೆಲ್ಲರು ಅವನನ್ನು ಕೊಳ್ಳೇ ಹೊಡೆಯುತ್ತಾರೆ; ತನ್ನ ನೆರೆಯವರಿಗೆ ಅವನು ನಿಂದೆ ಯಾಗಿದ್ದಾನೆ.
89:42b.PSA.089.042 ಅವನ ವೈರಿಗಳ ಬಲಗೈಯನ್ನು ಉನ್ನತ ಮಾಡಿದ್ದೀ; ಶತ್ರುಗಳೆಲ್ಲರನ್ನು ಸಂತೋಷಪಡಿಸಿದ್ದೀ.
89:43b.PSA.089.043 ಅವನ ಕತ್ತಿಯ ಬಾಯನ್ನು ಹಿಂದಿರುಗಿಸಿ, ಯುದ್ಧ ದಲ್ಲಿ ಅವನನ್ನು ನಿಲ್ಲುವಂತೆ ಮಾಡಲಿಲ್ಲ.
89:44b.PSA.089.044 ಅವನ ಪ್ರಭೆಯನ್ನು ತಡೆದಿ; ಅವನ ಸಿಂಹಾಸನವನ್ನು ನೆಲಕ್ಕೆ ಹಾಕಿದ್ದೀ.
89:45b.PSA.089.045 ಅವನ ಯೌವನದ ದಿವಸಗಳನ್ನು ಕಡಿಮೆಮಾಡಿ, ನಾಚಿಕೆಯಿಂದ ಅವನನ್ನು ಮುಚ್ಚಿದ್ದೀ ಸೆಲಾ.
89:46b.PSA.089.046 ಕರ್ತನೇ, ಎಷ್ಟರ ವರೆಗೆ? ಸದಾಕಾಲಕ್ಕೆ ನೀನು ಮರೆಯಾಗಿರುವಿ? ನಿನ್ನ ಸಿಟ್ಟು ಬೆಂಕಿಯ ಹಾಗೆ ಉರಿಯುವದೋ?
89:47b.PSA.089.047 ನನ್ನ ಆಯುಸ್ಸು ಎಷ್ಟು ಕಡಿಮೆ ಯೆಂದು ಜ್ಞಾಪಕಮಾಡಿಕೋ; ಎಲ್ಲಾ ಮನುಷ್ಯರನ್ನು ಯಾಕೆ ವ್ಯರ್ಥವಾಗಿ ನಿರ್ಮಿಸಿದ್ದೀ?
89:48b.PSA.089.048 ಮರಣವನ್ನು ನೋಡದೆ ಬದುಕುವಂಥ, ಸಮಾಧಿಯ ವಶದಿಂದ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳುವಂಥ, ಪುರುಷನು ಯಾರು ಸೆಲಾ.
89:49b.PSA.089.049 ಕರ್ತನೇ, ನಿನ್ನ ಸತ್ಯದಲ್ಲಿ ನೀನು ದಾವೀದನಿಗೆ ಆಣೆ ಇಟ್ಟ ನಿನ್ನ ಮುಂಚಿನ ಪ್ರೀತಿ ಕರುಣೆಯು ಎಲ್ಲಿ?
89:50b.PSA.089.050 ಕರ್ತನೇ, ನಿನ್ನ ಸೇವಕರ ನಿಂದೆ ಯನ್ನು, ಎಲ್ಲಾ ಪರಾಕ್ರಮಿಗಳ ನಿಂದೆಯನ್ನು ನಾನು ಹೇಗೆ ನನ್ನ ಎದೆಯಲ್ಲಿ ಹೊತ್ತೆನೆಂದೂ ಜ್ಞಾಪಕ ಮಾಡಿಕೋ.
89:51b.PSA.089.051 ಕರ್ತನೇ, ನಿನ್ನ ಶತ್ರುಗಳು ನಿಂದಿಸುತ್ತಾ ರಲ್ಲಾ? ನಿನ್ನ ಅಭಿಷಿಕ್ತನ ಹೆಜ್ಜೆಗಳನ್ನು ನಿಂದಿಸುತ್ತಾ ರಲ್ಲಾ?ಕರ್ತನಿಗೆ ಯುಗಯುಗಕ್ಕೂ ಸ್ತುತಿಯಾಗಲಿ. ಆಮೆನ್, ಅಮೆನ್.
89:52b.PSA.089.052 ಕರ್ತನಿಗೆ ಯುಗಯುಗಕ್ಕೂ ಸ್ತುತಿಯಾಗಲಿ. ಆಮೆನ್, ಅಮೆನ್.
90
90:1b.PSA.090.001 ಕರ್ತನೇ, ತಲತಲಾಂತರಗಳಲ್ಲಿ ನೀನು ನಮ್ಮ ವಾಸಸ್ಥಾನವಾಗಿದ್ದೀ.
90:2b.PSA.090.002 ಬೆಟ್ಟಗಳು ಹುಟ್ಟುವದಕ್ಕಿಂತ ಮುಂಚೆಯೂ ನೀನು ಭೂಮಿಯನ್ನೂ ಲೋಕವನ್ನೂ ನಿರ್ಮಿಸುವದಕ್ಕಿಂತ ಮುಂಚೆಯೂ ನಿತ್ಯತ್ವದಿಂದ ನಿತ್ಯತ್ವಕ್ಕೂ ನೀನು ದೇವರಾಗಿದ್ದೀ.
90:3b.PSA.090.003 ನೀನು ಮನುಷ್ಯನನ್ನು ನಾಶನಕ್ಕೆ ತಿರುಗಿಸಿ-- ಮನುಷ್ಯರ ಮಕ್ಕಳೇ, ಹಿಂತಿರುಗಿರಿ ಎಂದು ಹೇಳುತ್ತೀ;
90:4b.PSA.090.004 ಸಾವಿರ ವರುಷಗಳು ನಿನ್ನ ದೃಷ್ಟಿಗೆ ಕಳೆದು ಹೋದನಿನ್ನೆಯ ದಿವಸದ ಹಾಗೆಯೂ ರಾತ್ರಿ ಜಾವದ ಹಾಗೆಯೂ ಅವೆ.
90:5b.PSA.090.005 ಅವರನ್ನು ಪ್ರವಾಹದಂತೆ ಬಡು ಕೊಂಡು ಹೋಗುತ್ತೀ; ಅವರು ನಿದ್ರೆಯಲ್ಲಿದ್ದಂತೆಯೂ ಬೆಳಿಗ್ಗೆ ಚಿಗುರುವ ಹುಲ್ಲಿನ ಹಾಗೆಯೂ ಇದ್ದಾರೆ.
90:6b.PSA.090.006 ಅದು ಬೆಳಿಗ್ಗೆ ಅರಳಿ ಬೆಳೆಯುತ್ತದೆ. ಸಂಜೆಯಲ್ಲಿ ಕೊಯ್ಯಲ್ಪಟ್ಟು ಒಣಗುತ್ತದೆ.
90:7b.PSA.090.007 ನಾವು ನಿನ್ನ ಕೋಪದಿಂದ ತೀರಿಹೋಗಿ, ನಿನ್ನ ರೌದ್ರದಿಂದ ತಲ್ಲಣಿಸುತ್ತೇವೆ.
90:8b.PSA.090.008 ನಮ್ಮ ಅಕ್ರಮಗಳನ್ನು ನಿನ್ನ ಮುಂದೆಯೂ ನಮ್ಮ ಮರೆಯಾದ ಪಾಪಗಳನ್ನು ನಿನ್ನ ಮುಖದ ಬೆಳಕಿನಲ್ಲಿಯೂ ಇಟ್ಟಿದ್ದೀ.
90:9b.PSA.090.009 ನಮ್ಮ ದಿವಸಗಳೆಲ್ಲಾ ನಿನ್ನ ಕೋಪದಿಂದ ದಾಟಿಹೋದವು. ನಮ್ಮ ವರುಷಗಳನ್ನು ಕೇಳಿದ ಕಥೆಯ ಹಾಗೆ ಕಳೆ ಯುತ್ತೇವೆ.
90:10b.PSA.090.010 ನಮ್ಮ ಆಯುಷ್ಕಾಲವು ಎಪ್ಪತ್ತು ವರುಷ, ಬಲದಿಂದಿದ್ದರೆ ಎಂಭತ್ತು ವರುಷ; ಆದಾಗ್ಯೂ ಅವು ಗಳ ಬಲವು ಪ್ರಯಾಸವೂ ದುಃಖವೂ ಆಗಿವೆ; ಅದು ಬೇಗ ಕೊಯಿದು ಹಾಕಲ್ಪಡುತ್ತದೆ; ನಾವು ಹಾರಿ ಹೋಗುತ್ತೇವೆ.
90:11b.PSA.090.011 ನಿನ್ನ ಕೋಪದ ಬಲವನ್ನು ತಿಳಿದ ವನಾರು? ನಿನ್ನ ಭಯದ ಪ್ರಕಾರವೇ ನಿನ್ನ ಉಗ್ರತೆ ಇದೆ.
90:12b.PSA.090.012 ನಾವು ಜ್ಞಾನವುಳ್ಳ ಹೃದಯವನ್ನು ಹೊಂದುವ ಹಾಗೆ, ನಮ್ಮ ದಿವಸಗಳನ್ನು ಲೆಕ್ಕಿಸುವದಕ್ಕೆ ನಮಗೆ ಕಲಿಸು.
90:13b.PSA.090.013 ಕರ್ತನೇ, ಎಷ್ಟರವರೆಗೆ ಹಿಂತಿರುಗದಿರುವಿ? ನಿನ್ನ ಸೇವಕರ ವಿಷಯದಲ್ಲಿ ಅಂತಃಕರಣವಿರಲಿ.
90:14b.PSA.090.014 ಬೆಳಿಗ್ಗೆ ನಿನ್ನ ಕರುಣೆಯಿಂದ ನಮಗೆ ತೃಪ್ತಿಪಡಿಸು; ಆಗ ನಮ್ಮ ದಿವಸಗಳಲ್ಲೆಲ್ಲಾ ಉತ್ಸಾಹಧ್ವನಿಗೈದು ಸಂತೋಷ ಪಡುವೆವು.
90:15b.PSA.090.015 ನೀನು ನಮ್ಮನ್ನು ಕುಂದಿಸಿದ ದಿವಸಗಳ ಪ್ರಕಾರವೂ ನಾವು ಕೇಡನ್ನು ನೋಡಿದ ವರುಷಗಳ ಪ್ರಕಾರವೂ ನಮ್ಮನ್ನು ಸಂತೋಷಪಡಿಸು.
90:16b.PSA.090.016 ನಿನ್ನ ಸೇವಕರಿಗೆ ನಿನ್ನ ಕೆಲಸವೂ ಅವರ ಮಕ್ಕಳಿಗೆ ನಿನ್ನ ಪ್ರಭೆಯೂ ತೋರಿಬರಲಿ.ನಮ್ಮ ದೇವರಾದ ಕರ್ತನ ರಮ್ಯತೆಯು ನಮ್ಮ ಮೇಲೆ ಇರಲಿ; ನಾವು ಕೈಹಾಕಿದ ಕೈಲಸವನ್ನು ನಮಗೆ ಸ್ಥಿರಪಡಿಸು; ಹೌದು, ನಮ್ಮ ಕೆಲಸವನ್ನು ಸ್ಥಿರಪಡಿಸು;
90:17b.PSA.090.017 ನಮ್ಮ ದೇವರಾದ ಕರ್ತನ ರಮ್ಯತೆಯು ನಮ್ಮ ಮೇಲೆ ಇರಲಿ; ನಾವು ಕೈಹಾಕಿದ ಕೈಲಸವನ್ನು ನಮಗೆ ಸ್ಥಿರಪಡಿಸು; ಹೌದು, ನಮ್ಮ ಕೆಲಸವನ್ನು ಸ್ಥಿರಪಡಿಸು;
91
91:1b.PSA.091.001 ಮಹೋನ್ನತನ ಮರೆಯಾದ ಸ್ಥಳದಲ್ಲಿ ವಾಸಿಸುವವನು ಸರ್ವಶಕ್ತನ ನೆರಳಿನಲ್ಲಿ ತಂಗುವನು.
91:2b.PSA.091.002 ನನ್ನ ಆಶ್ರಯವೂ ಕೋಟೆಯೂ ನಾನು ಭರವಸವಿಟ್ಟಿರುವ ನನ್ನ ದೇವರೂ ಎಂದು ನಾನು ಕರ್ತನಿಗೆ ಹೇಳುತ್ತೇನೆ.
91:3b.PSA.091.003 ನಿಶ್ಚಯವಾಗಿ ಆತನು ನಿನ್ನನ್ನು ಬೇಡನ ಉರ್ಲಿ ನಿಂದಲೂ ಅಪಾಯದ ಜಾಡ್ಯದಿಂದಲೂ ಬಿಡಿಸು ವನು.
91:4b.PSA.091.004 ತನ್ನ ರೆಕ್ಕೆಗಳಿಂದ ನಿನ್ನನ್ನು ಹೊದಗಿಸುವನು; ಆತನ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳುವಿ; ಆತನ ಸತ್ಯವು ನಿನ್ನ ಖೇಡ್ಯವೂ ಡಾಲೂ ಆಗಿದೆ.
91:5b.PSA.091.005 ರಾತ್ರಿಯ ಭಯಂಕರತೆಗೂ ಹಗಲಲ್ಲಿ ಹಾರುವ ಬಾಣಕ್ಕೂ
91:6b.PSA.091.006 ಅಂಧಕಾರದಲ್ಲಿ ನಡೆಯುವ ಜಾಡ್ಯಕ್ಕೂ ಇಲ್ಲವೆ ಮಧ್ಯಾಹ್ನದಲ್ಲಿ ಹಾಳು ಮಾಡುವ ನಾಶನಕ್ಕೂ ನೀನು ಭಯಪಡದೆ ಇರುವಿ.
91:7b.PSA.091.007 ನಿನ್ನ ಕಡೆಯಲ್ಲಿ ಸಾವಿರ ಜನರೂ ನಿನ್ನ ಬಲಗಡೆಯಲ್ಲಿ ಹತ್ತು ಸಾವಿರ ಜನರೂ ಬಿದ್ದಾಗ್ಯೂ ನಿನ್ನ ಸವಿಾಪಕ್ಕೆ ಅದು ಬರುವದಿಲ್ಲ.
91:8b.PSA.091.008 ನಿನ್ನ ಕಣ್ಣುಗಳಿಂದ ಮಾತ್ರ ನೀನು ದೃಷ್ಟಿಸಿ ದುಷ್ಟರಿಗೆ ಮುಯ್ಯಿಗೆ ಮುಯ್ಯಿ ಆಗುವದನ್ನು ನೋಡುವಿ.
91:9b.PSA.091.009 ಮಹೋನ್ನತನಾದ ಕರ್ತನನ್ನು ನಿನ್ನ ಆಶ್ರಯ ವಾಗಿಯೂ ನಿವಾಸಸ್ಥಾನವಾಗಿಯೂ ಮಾಡಿಕೊಂಡ ದ್ದರಿಂದ
91:10b.PSA.091.010 ಕೇಡು ನಿನ್ನನ್ನು ಮುಟ್ಟದು; ಯಾವ ವ್ಯಾಧಿಯೂ ನಿನ್ನ ನಿವಾಸಕ್ಕೆ ಸವಿಾಪಿಸದು.
91:11b.PSA.091.011 ನಿನ್ನ ಎಲ್ಲಾ ಮಾರ್ಗಗಳಲ್ಲಿ ನಿನ್ನನ್ನು ಕಾಪಾಡುವದಕ್ಕೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಆಜ್ಞಾಪಿಸುವನು.
91:12b.PSA.091.012 ನಿನ್ನ ಪಾದವು ಕಲ್ಲಿಗೆ ತಗಲದ ಹಾಗೆ ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು.
91:13b.PSA.091.013 ಸಿಂಹ ಸರ್ಪ ಮೇಲೆ ನಡೆಯುವಿ; ಯೌವನದ ಸಿಂಹವನ್ನೂ ಘಟಸರ್ಪವನ್ನೂ ತುಳಿದು ಬಿಡುವಿ.
91:14b.PSA.091.014 ಅವನು ತನ್ನ ಪ್ರೀತಿಯನ್ನು ನನ್ನ ಮೇಲೆ ಇಟ್ಟಿದ್ದಾನೆ; ಆದದರಿಂದ ಅವನನ್ನು ತಪ್ಪಿಸುವೆನು; ಅವನು ನನ್ನ ಹೆಸರನ್ನು ತಿಳಿದಿರುವದರಿಂದ ಅವನನ್ನು ಉನ್ನತದಲ್ಲಿಡುವೆನು.
91:15b.PSA.091.015 ಅವನು ನನ್ನನ್ನು ಕರೆಯುವನು; ನಾನು ಅವನಿಗೆ ಉತ್ತರ ಕೊಡುವೆನು; ಇಕ್ಕಟ್ಟಿನಲ್ಲಿ ನಾನು ಅವನ ಸಂಗಡ ಇದ್ದು ಅವನನ್ನು ತಪ್ಪಿಸಿ; ಘನಪಡಿಸುವೆನು.ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.
91:16b.PSA.091.016 ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.
92
92:1b.PSA.092.001 ಕರ್ತನನ್ನು ಕೊಂಡಾಡುವದೂ; ಮಹೋನ್ನತನೇ, ನಿನ್ನ ಹೆಸರನ್ನು ಕೀರ್ತಿಸುವದೂ
92:2b.PSA.092.002 ಬೆಳಿಗ್ಗೆ ನಿನ್ನ ಪ್ರೀತಿ ಕರುಣೆಯನ್ನೂ ಪ್ರತಿ ರಾತ್ರಿ ಯಲ್ಲಿ ನಿನ್ನ ನಂಬಿಗಸ್ತಿಕೆಯನ್ನೂ
92:3b.PSA.092.003 ಹತ್ತು ತಂತಿ ವೀಣೆ ಯಿಂದಲೂ ವಾದ್ಯದಿಂದಲೂ ಕಿನ್ನರಿಯ ಘನ ಸ್ವರ ದಿಂದಲೂ ತಿಳಿಸುವದು ಒಳ್ಳೇದು.
92:4b.PSA.092.004 ಕರ್ತನೇ, ನಿನ್ನ ಕ್ರಿಯೆಯಿಂದ ನನ್ನನ್ನು ಸಂತೋಷ ಪಡಿಸಿದ್ದೀ. ನಿನ್ನ ಕೈಕೆಲಸಗಳಲ್ಲಿ ನಾನು ಜಯ ಧ್ವನಿಗೈಯುತ್ತೇನೆ.
92:5b.PSA.092.005 ಕರ್ತನೇ, ನಿನ್ನ ಕೆಲಸಗಳು ಎಷ್ಟೋ ದೊಡ್ಡವು! ನಿನ್ನ ಯೋಚನೆಗಳು ಬಹಳ ಆಳವಾಗಿವೆ.
92:6b.PSA.092.006 ಇದನ್ನು ಪಶುಪ್ರಾಯದವನಾದ ಮೂರ್ಖನು ಅರಿಯನು. ಇಲ್ಲವೆ ಹುಚ್ಚನು ತಿಳಿಯನು.
92:7b.PSA.092.007 ದುಷ್ಟರು ಚಿಗುರುವದು ಮತ್ತು ಅಕ್ರಮಗಾರರು ವೃದ್ಧಿಯಾಗು ವದು ಅವರು ಎಂದೆಂದಿಗೂ ನಿರ್ಮೂಲವಾಗುವದ ಕ್ಕಾಗಿಯೇ.
92:8b.PSA.092.008 ಆದರೆ ಕರ್ತನೇ, ಎಂದೆಂದಿಗೂ ನೀನು ಉನ್ನತನಾಗಿದ್ದೀ;
92:9b.PSA.092.009 ಇಗೋ, ಓ ಕರ್ತನೇ, ನಿನ್ನ ಶತ್ರು ಗಳು, ಓ ಕರ್ತನೇ, ಇಗೋ, ನಿನ್ನ ಶತ್ರುಗಳು ನಾಶವಾಗುವರು; ಅಕ್ರಮ ಮಾಡುವವರೆಲ್ಲರು ಚದರಿ ಹೋಗುವರು.
92:10b.PSA.092.010 ಆದರೆ ನೀನು ನನ್ನ ಕೊಂಬನ್ನು ಕಾಡುಕೋಣದ ಕೊಂಬಿನಹಾಗೆ ಎತ್ತುವಿ; ಹೊಸ ಎಣ್ಣೆಯಿಂದ ಅಭಿಷಿಕ್ತ ನಾಗುವೆನು.
92:11b.PSA.092.011 ನನ್ನ ಕಣ್ಣು ಸಹ ನನ್ನ ವಿರೋಧಿಗಳ ಮೇಲೆ ದೃಷ್ಟಿಸುವದು; ನನಗೆ ವಿರೋಧವಾಗಿ ಏಳುವ ದುರ್ಮಾರ್ಗಿಗಳನ್ನು ಕುರಿತು ನನ್ನ ಇಷ್ಟದಂತೆ ನನ್ನ ಕಿವಿಗಳು ಕೇಳುವವು.
92:12b.PSA.092.012 ನೀತಿವಂತನು ಖರ್ಜೂರ ಮರದ ಹಾಗೆ ಚಿಗುರುವನು; ಲೆಬನೋನಿ ನಲ್ಲಿರುವ ದೇವದಾರಿನ ಹಾಗೆ ಬೆಳೆಯುವನು.
92:13b.PSA.092.013 ಅವರು ಕರ್ತನ ಆಲಯದಲ್ಲಿ ನೆಡಲ್ಪಟ್ಟು ನಮ್ಮ ದೇವರ ಅಂಗಳಗಳಲ್ಲಿ ವೃದ್ಧಿಯಾಗುವರು.
92:14b.PSA.092.014 ಮುದಿ ಪ್ರಾಯದಲ್ಲಿಯೂ ಫಲ ಫಲಿಸುವರು. ಅವರು ಪುಷ್ಟಿಯಾಗಿ ವೃದ್ಧಿಯಾಗುವರು.ಕರ್ತನು ಯಥಾರ್ಥನೂ ನನ್ನ ಬಂಡೆಯೂ ಆಗಿದ್ದಾನೆ; ಆತನಲ್ಲಿ ಅನೀತಿ ಇರುವದಿಲ್ಲ.
92:15b.PSA.092.015 ಕರ್ತನು ಯಥಾರ್ಥನೂ ನನ್ನ ಬಂಡೆಯೂ ಆಗಿದ್ದಾನೆ; ಆತನಲ್ಲಿ ಅನೀತಿ ಇರುವದಿಲ್ಲ.
93
93:1b.PSA.093.001 ಕರ್ತನು ಆಳುತ್ತಾನೆ, ಆತನು ಘನತೆಯನ್ನು ಹೊದ್ದುಕೊಂಡಿದ್ದಾನೆ; ಕರ್ತನು ಬಲ ದಿಂದ ಹೊದ್ದುಕೊಂಡಿದ್ದಾನೆ, ಅದರಿಂದ ತನ್ನ ನಡು ವನ್ನು ಕಟ್ಟಿಕೊಂಡಿದ್ದಾನೆ; ಲೋಕವು ಸಹ ಸ್ಥಿರವಾಗಿದೆ; ಕದಲುವದಿಲ್ಲ.
93:2b.PSA.093.002 ನಿನ್ನ ಸಿಂಹಾಸನವು ಪೂರ್ವಕಾಲ ದಿಂದ ಸ್ಥಿರವಾಗಿದೆ; ಯುಗಯುಗದಿಂದ ನೀನು ಇದ್ದೀ.
93:3b.PSA.093.003 ಕರ್ತನೇ, ಪ್ರವಾಹಗಳು ಎತ್ತಲ್ಪಟ್ಟಿವೆ; ಪ್ರವಾಹಗಳು ತಮ್ಮ ಶಬ್ದವನ್ನು ಎತ್ತಿವೆ; ಪ್ರವಾಹ ಗಳು ತಮ್ಮ ತೆರೆಗಳನ್ನು ಎತ್ತುತ್ತವೆ.
93:4b.PSA.093.004 ಬಹಳ ನೀರುಗಳ ಶಬ್ದಕ್ಕಿಂತಲೂ ಹೌದು, ಸಮುದ್ರದ ಬಲವಾದ ಅಲೆ ಗಳಿಗಿಂತಲೂ ಉನ್ನತದಲ್ಲಿ ಕರ್ತನು ಬಲಿಷ್ಠನಾಗಿ ದ್ದಾನೆ.ನಿನ್ನ ಸಾಕ್ಷಿಗಳು ಬಹಳ ನಿಶ್ಚಯವಾದವುಗಳು; ಓ ಕರ್ತನೇ, ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.
93:5b.PSA.093.005 ನಿನ್ನ ಸಾಕ್ಷಿಗಳು ಬಹಳ ನಿಶ್ಚಯವಾದವುಗಳು; ಓ ಕರ್ತನೇ, ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.
94
94:1b.PSA.094.001 ಓ ಕರ್ತನೇ, ದೇವರೇ ಮುಯ್ಯಿ ತೀರಿಸುವದು ನಿನ್ನದು; ಓ ದೇವರೇ, ಮುಯ್ಯಿ ತೀರಿಸುವದು ನಿನಗೆ ಸೇರಿದ್ದು. ನಿನ್ನನ್ನು ಪ್ರಕಟಿಸಿಕೋ.
94:2b.PSA.094.002 ಭೂಮಿಯ ನ್ಯಾಯಾಧಿಪತಿಯೇ, ನೀನು ಎದ್ದೇಳು; ಗರ್ವಿಷ್ಠರಿಗೆ ಪ್ರತೀಕಾರವನ್ನು ಕೊಡು.
94:3b.PSA.094.003 ಕರ್ತನೇ, ದುಷ್ಟರು ಎಷ್ಟರ ವರೆಗೆ ದುಷ್ಟರು ಎಷ್ಟರ ವರೆಗೆ ಜಯಿಸುವರು?
94:4b.PSA.094.004 ಎಷ್ಟುಕಾಲ ಕಠಿಣ ವಾದವುಗಳನ್ನು ನುಡಿದು ಮಾತಾಡುತ್ತಾರೆ? ದುಷ್ಟತನ ಮಾಡುವವರೆಲ್ಲರು ಹೆಚ್ಚಿಸಿಕೊಳ್ಳುತ್ತಾರೆ;
94:5b.PSA.094.005 ಓ ಕರ್ತನೇ, ನಿನ್ನ ಜನರನ್ನು ತುಂಡುತುಂಡು ಮಾಡುತ್ತಾರೆ; ನಿನ್ನ ಸ್ವಾಸ್ಥ್ಯವನ್ನು ಬಾಧಿಸುತ್ತಾರೆ.
94:6b.PSA.094.006 ವಿಧವೆಯನ್ನೂ ಪರ ದೇಶಸ್ಥನನ್ನೂ ಅವರು ಕೊಲ್ಲುತ್ತಾರೆ; ದಿಕ್ಕಿಲ್ಲದವರನ್ನು ಹತಮಾಡುತ್ತಾರೆ.
94:7b.PSA.094.007 ಕರ್ತನು ನೋಡುವದಿಲ್ಲ; ಇಲ್ಲವೆ ಯಾಕೋಬನ ದೇವರು ಲಕ್ಷಿಸುವದಿಲ್ಲ ಅನ್ನುತ್ತಾರೆ.
94:8b.PSA.094.008 ಜನರಲ್ಲಿ ಪಶುಪ್ರಾಯದವರೇ, ನೀವು ಗ್ರಹಿಸಿರಿ; ಹುಚ್ಚರೇ, ಯಾವಾಗ ಬುದ್ಧಿವಂತರಾಗುವಿರಿ?
94:9b.PSA.094.009 ಕಿವಿ ಯನ್ನು ಕೊಟ್ಟವನು ಕೇಳನೋ? ಕಣ್ಣನ್ನು ರೂಪಿಸಿದವನು ತಿಳಿಯನೋ?
94:10b.PSA.094.010 ಜನಾಂಗಗಳನ್ನು ಶಿಕ್ಷಿಸುವ ವನೂ ಮನುಷ್ಯನಿಗೆ ತಿಳುವಳಿಕೆಯನ್ನು ಕಲಿಸುವವನೂ ಗದರಿಸನೋ?
94:11b.PSA.094.011 ಕರ್ತನು ಮನುಷ್ಯನ ಯೋಚನೆ ಗಳನ್ನು ವ್ಯರ್ಥವೆಂದು ತಿಳುಕೊಳ್ಳುತ್ತಾನೆ.
94:12b.PSA.094.012 ಓ ಕರ್ತನೇ, ನೀನು ಶಿಕ್ಷಿಸುವವನೂ ನಿನ್ನ ನ್ಯಾಯ ಪ್ರಮಾಣದಿಂದ ಯಾರಿಗೆ ಕಲಿಸುವಿಯೋ ಅವನು ಧನ್ಯನು.
94:13b.PSA.094.013 ದುಷ್ಟನಿಗಾಗಿ ಕುಣಿಯು ಅಗಿಯಲ್ಪಡುವ ವರೆಗೆ ಕಷ್ಟದ ದಿವಸಗಳಲ್ಲಿ ಅಂಥವನಿಗೆ ವಿಶ್ರಾಂತಿ ಯನ್ನು ಕೊಡುವನು.
94:14b.PSA.094.014 ಕರ್ತನು ತನ್ನ ಜನರನ್ನು ತೊರೆಯನು; ಇಲ್ಲವೆ ತನ್ನ ಸ್ವಾಸ್ಥ್ಯವನ್ನು ಬಿಟ್ಟುಬಿಡನು.
94:15b.PSA.094.015 ನ್ಯಾಯವು ನೀತಿಗೆ ತಿರುಗಿಕೊಳ್ಳುವದು; ಯಥಾರ್ಥ ಹೃದಯದವರೆಲ್ಲರು ಅದನ್ನು ಹಿಂಬಾಲಿಸುವರು.
94:16b.PSA.094.016 ನನಗೋಸ್ಕರ ದುರ್ಮಾರ್ಗಿಗಳಿಗೆ ವಿರೋಧ ವಾಗಿ ಏಳುವವನ್ಯಾರು? ಇಲ್ಲವೆ ಅಪರಾಧ ಮಾಡು ವವರಿಗೆ ವಿರೋಧವಾಗಿ ನನಗೋಸ್ಕರ ನಿಂತು ಕೊಳ್ಳುವವನಾರು?
94:17b.PSA.094.017 ಕರ್ತನು ನನಗೆ ಸಹಾಯಕ ನಾಗಿರದಿದ್ದರೆ ನನ್ನ ಪ್ರಾಣವು ಮೌನದಲ್ಲಿ ವಾಸಿಸ ಬೇಕಾಗಿತ್ತು.
94:18b.PSA.094.018 ನನ್ನ ಕಾಲುಜಾರಿತೋ ಎಂದು ನಾನು ಅಂದಾಗಲೇ ಓ ಕರ್ತನೇ, ನಿನ್ನ ಕರುಣೆಯು ನನ್ನನ್ನು ಎತ್ತಿಹಿಡಿಯಿತು.
94:19b.PSA.094.019 ನನ್ನ ಚಿಂತೆಗಳು ಅಂತರಂಗದಲ್ಲಿ ಹೆಚ್ಚುವಾಗ ನಿನ್ನ ಆದರಣೆಗಳು ನನ್ನ ಪ್ರಾಣವನ್ನು ಆನಂದಪಡಿಸುತ್ತವೆ.
94:20b.PSA.094.020 ವಿಧಿಯಿಂದ ಕೇಡನ್ನು ಕಲ್ಪಿಸುವ ಅಪರಾಧದ ಸಿಂಹಾಸನವು ನಿನ್ನ ಸಂಗಡ ಅನ್ಯೋನ್ಯವಾಗಿರು ವದೋ?
94:21b.PSA.094.021 ನೀತಿವಂತನ ಪ್ರಾಣಕ್ಕೆ ವಿರೋಧವಾಗಿ ಅವರು ಕೂಡಿಕೊಳ್ಳುತ್ತಾರೆ; ನಿರಪರಾಧಿಯ ರಕ್ತವನ್ನು ಖಂಡಿಸುತ್ತಾರೆ.
94:22b.PSA.094.022 ಆದರೆ ಕರ್ತನು ನನಗೆ ದುರ್ಗವೂ ನನ್ನ ದೇವರು ನನ್ನ ಆಶ್ರಯದ ಬಂಡೆಯೂ ಆಗಿದ್ದಾನೆ.ಅವರ ಅಪರಾಧವನ್ನು ಅವರ ಮೇಲೆ ತಿರಿಗಿ ಬರಮಾಡುವನು; ಅವರ ಕೇಡಿನಲ್ಲಿ ಅವರನ್ನು ಸಂಹರಿಸುವನು; ನಮ್ಮ ದೇವರಾದ ಕರ್ತನು ಅವರನ್ನು ಸಂಹರಿಸುವನು.
94:23b.PSA.094.023 ಅವರ ಅಪರಾಧವನ್ನು ಅವರ ಮೇಲೆ ತಿರಿಗಿ ಬರಮಾಡುವನು; ಅವರ ಕೇಡಿನಲ್ಲಿ ಅವರನ್ನು ಸಂಹರಿಸುವನು; ನಮ್ಮ ದೇವರಾದ ಕರ್ತನು ಅವರನ್ನು ಸಂಹರಿಸುವನು.
95
95:1b.PSA.095.001 ಬನ್ನಿರಿ, ಕರ್ತನಿಗೆ ಉತ್ಸಾಹ ಧ್ವನಿಮಾಡುವಾ ನಮ್ಮ ರಕ್ಷಣೆಯ ಬಂಡೆಗೆ ಜಯಧ್ವನಿ ಮಾಡೋಣ.
95:2b.PSA.095.002 ಸ್ತೋತ್ರದಿಂದ ಆತನ ಸನ್ನಿಧಿಯ ಮುಂದೆ ಬಂದು ಕೀರ್ತನೆಗಳಿಂದ ಆತನಿಗೆ ಆನಂದದ ಧ್ವನಿಮಾಡೋಣ.
95:3b.PSA.095.003 ಕರ್ತನು ದೊಡ್ಡ ದೇವರೂ ಎಲ್ಲಾ ದೇವರುಗಳ ಮೇಲೆ ದೊಡ್ಡ ಅರಸನೂ ಆಗಿದ್ದಾನೆ.
95:4b.PSA.095.004 ಆತನ ಕೈಯಲ್ಲಿ ಭೂಮಿಯ ಆಳವಾದ ಸ್ಥಳಗಳು ಅವೆ; ಬೆಟ್ಟಗಳ ಬಲವು ಆತನದೇ.
95:5b.PSA.095.005 ಸಮುದ್ರವು ಆತನದು; ಆತನು ಅದನ್ನು ಮಾಡಿದನು; ಆತನ ಕೈಗಳು ಒಣಭೂಮಿಯನ್ನು ರೂಪಿಸಿದವು.
95:6b.PSA.095.006 ಬನ್ನಿರಿ, ನಮ್ಮನ್ನು ಉಂಟುಮಾಡಿದ ಕರ್ತನ ಮುಂದೆ ಮೊಣಕಾಲು ಊರೋಣ ಆತನಿಗೆ ಎರಗಿ ಆರಾಧಿಸೋಣ.
95:7b.PSA.095.007 ಆತನು ನಮ್ಮ ದೇವರು; ನಾವು ಆತನು ಮೇಯಿಸುವ ಜನರೂ ಆತನ ಕೈ ಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಸ್ವರವನ್ನು ಕೇಳಿದರೆ
95:8b.PSA.095.008 ಅರಣ್ಯದಲ್ಲಿ ಆದ ಶೋಧನೆಯ ದಿವಸದಲ್ಲಿ ಕೋಪವನ್ನೆಬ್ಬಿಸಿದಂತೆ ನಿಮ್ಮ ಹೃದ ಯವನ್ನು ಕಠಿಣಮಾಡಿಕೊಳ್ಳಬೇಡಿರಿ.
95:9b.PSA.095.009 ಅಲ್ಲಿ ನಿಮ್ಮ ತಂದೆಗಳು ನನ್ನನ್ನು ಶೋಧಿಸಿ, ಪರೀಕ್ಷಿಸಿದರು; ನನ್ನ ಕೆಲಸವನ್ನು ನೋಡಿದರು.
95:10b.PSA.095.010 ನಾಲ್ವತ್ತು ವರುಷ ಆ ಸಂತತಿಗೆ ಬೇಸರಗೊಂಡು--ಇವರು ತಮ್ಮ ಹೃದಯ ದಲ್ಲಿ ತಪ್ಪಿ ಹೋಗುವ ಜನರಾಗಿದ್ದಾರೆ; ನನ್ನ ಮಾರ್ಗ ಗಳನ್ನು ಅವರು ಅರಿಯರು ಅಂದೆನು.ಆದದರಿಂದ ನನ್ನ ವಿಶ್ರಾಂತಿಯಲ್ಲಿ ಅವರು ಪ್ರವೇಶಿಸರೆಂದು ಕೋಪ ದಿಂದ ಆಣೆ ಇಟ್ಟುಕೊಂಡೆನು.
95:11b.PSA.095.011 ಆದದರಿಂದ ನನ್ನ ವಿಶ್ರಾಂತಿಯಲ್ಲಿ ಅವರು ಪ್ರವೇಶಿಸರೆಂದು ಕೋಪ ದಿಂದ ಆಣೆ ಇಟ್ಟುಕೊಂಡೆನು.
96
96:1b.PSA.096.001 ಕರ್ತನಿಗೆ ಹೊಸ ಹಾಡನ್ನು ಹಾಡಿರಿ; ಸಮಸ್ತ ಭೂಮಿಯೇ, ಕರ್ತನಿಗೆ ಹಾಡಿರಿ.
96:2b.PSA.096.002 ಕರ್ತನಿಗೆ ಹಾಡಿರಿ, ಆತನ ಹೆಸರನ್ನು ಸ್ತುತಿಸಿರಿ; ಆತನ ರಕ್ಷಣೆಯನ್ನು ದಿನ ದಿನಕ್ಕೆ ಸಾರಿ ಹೇಳಿರಿ.
96:3b.PSA.096.003 ಅನ್ಯಜನಾಂಗದಲ್ಲಿ ಆತನ ಘನವನ್ನೂ ಎಲ್ಲಾ ಜನಾಂಗಗಳಲ್ಲಿ ಆತನ ಅದ್ಭುತಗಳನ್ನೂ ವಿವ ರಿಸಿರಿ.
96:4b.PSA.096.004 ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸ ಲ್ಪಡತಕ್ಕವನೂ ಆಗಿದ್ದಾನೆ; ಆತನಿಗೇ ಭಯಪಡ ತಕ್ಕದ್ದು.
96:5b.PSA.096.005 ಜನಾಂಗಗಳ ದೇವರುಗಳೆಲ್ಲಾ ವಿಗ್ರಹಗಳಾಗಿವೆ; ಆದರೆ ಕರ್ತನು ಆಕಾಶಗಳನ್ನು ನಿರ್ಮಿಸಿ ದನು.
96:6b.PSA.096.006 ಘನವೂ ಪ್ರಭೆಯೂ ಆತನ ಮುಂದೆ ಅವೆ; ಬಲವೂ ಸೌಂದರ್ಯವೂ ಆತನ ಪರಿಶುದ್ಧ ಸ್ಥಳದಲ್ಲಿ ಅವೆ.
96:7b.PSA.096.007 ಓ ಜನಾಂಗಗಳೇ, ಕರ್ತನಿಗೆ ನೀವು ಘನವನ್ನೂ ಬಲವನ್ನೂ ಸಲ್ಲಿಸಿರಿ.
96:8b.PSA.096.008 ಕರ್ತನಿಗೆ, ಆತನ ಹೆಸರಿಗೆ ಸಲ್ಲತಕ್ಕ ಘನವನ್ನು ಸಲ್ಲಿಸಿರಿ; ಕಾಣಿಕೆ ತೆಗೆದುಕೊಂಡು ಆತನ ಅಂಗಳಗಳಿಗೆ ಬನ್ನಿರಿ.
96:9b.PSA.096.009 ಪರಿಶುದ್ಧತ್ವದ ಸೌಂದರ್ಯದಿಂದ ಕರ್ತನನ್ನು ಆರಾಧಿಸಿರಿ; ಸಮಸ್ತ ಭೂಮಿಯೇ, ಆತನ ಮುಂದೆ ಭಯಪಡು,
96:10b.PSA.096.010 ಕರ್ತನು ಆಳುತ್ತಾನೆ; ಲೋಕವು ಸ್ಥಿರವಾಗಿದೆ, ಕದಲುವದಿಲ್ಲ. ಆತನು ಜನಗಳಿಗೆ ನೀತಿಯಲ್ಲಿ ನ್ಯಾಯತೀರಿಸುವನೆಂದು ಅನ್ಯಜನಾಂಗಗಳಲ್ಲಿ ಹೇಳಿರಿ.
96:11b.PSA.096.011 ಆಕಾಶಗಳು ಸಂತೋಷಿಸಲಿ; ಭೂಮಿಯು ಉಲ್ಲಾಸಪಡಲಿ; ಸಮುದ್ರವೂ ಅದರ ಪರಿಪೂರ್ಣ ತೆಯೂ ಘೋಷಿಸಲಿ.
96:12b.PSA.096.012 ಹೊಲವೂ ಅದರಲ್ಲಿರುವ ಸಮಸ್ತವೂ ಉತ್ಸಾಹಪಡಲಿ; ಅಡವಿಯ ಮರಗಳೆಲ್ಲಾ ಕರ್ತನ ಮುಂದೆಯೇ ಉತ್ಸಾಹಧ್ವನಿ ಮಾಡಲಿ.ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು.
96:13b.PSA.096.013 ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು.
97
97:1b.PSA.097.001 ಕರ್ತನು ಆಳುತ್ತಾನೆ; ಭೂಮಿಯು ಉಲ್ಲಾಸಪಡಲಿ; ದ್ವೀಪಗಳ ಸಮೂಹವು ಸಂತೋ ಷಿಸಲಿ.
97:2b.PSA.097.002 ಮೇಘಗಳೂ ಕಾರ್ಗತ್ತಲೂ ಆತನ ಸುತ್ತಲು ಅವೆ; ನೀತಿಯೂ ನ್ಯಾಯವೂ ಆತನ ಸಿಂಹಾಸನದ ಸ್ಥಳವಾಗಿದೆ.
97:3b.PSA.097.003 ಬೆಂಕಿಯು ಆತನ ಮುಂದೆ ಹೋಗಿ ಆತನ ವೈರಿಗಳನ್ನು ಸುತ್ತಲೂ ದಹಿಸುವದು.
97:4b.PSA.097.004 ಆತನ ಮಿಂಚುಗಳು ಲೋಕವನ್ನು ಬೆಳಗಿಸುತ್ತವೆ; ಭೂಮಿಯು ನೋಡಿ, ನಡುಗುತ್ತದೆ.
97:5b.PSA.097.005 ಕರ್ತನ ಸನ್ನಿಧಿಯಲ್ಲಿ ಸಮಸ್ತ ಭೂಮಿಯು ಕರ್ತನ ಮುಂದೆ ಬೆಟ್ಟಗಳು ಮೇಣದ ಹಾಗೆ ಕರಗುತ್ತವೆ.
97:6b.PSA.097.006 ಆಕಾಶಗಳು ಆತನ ನೀತಿಯನ್ನು ತಿಳಿಸುತ್ತವೆ; ಎಲ್ಲಾ ಜನಗಳು ಆತನ ಘನವನ್ನು ನೋಡುತ್ತಾರೆ.
97:7b.PSA.097.007 ಕೆತ್ತಿದ ವಿಗ್ರಹಗಳನ್ನು ಸೇವಿಸಿ, ವಿಗ್ರಹಗಳಲ್ಲಿ ಹೆಮ್ಮೆಪಡುವ ವರೆಲ್ಲರು ನಾಚಿಕೆಪಡಲಿ; ಎಲ್ಲಾ ದೇವರುಗಳೇ, ಆತನನ್ನು ಆರಾಧಿಸಿರಿ.
97:8b.PSA.097.008 ಚೀಯೋನ್ ಇದನ್ನು ಕೇಳಿ ಸಂತೋಷಿಸಿತು. ಓ ಕರ್ತನೇ, ನಿನ್ನ ನ್ಯಾಯಗಳ ನಿಮಿತ್ತ ಯೆಹೂದದ ಕುಮಾರ್ತೆಗಳು ಉಲ್ಲಾಸಿಸುತ್ತಾರೆ.
97:9b.PSA.097.009 ಕರ್ತನೇ, ನೀನು ಸಮಸ್ತ ಭೂಮಿಯ ಮೇಲೆ ಮಹೋನ್ನತನಾಗಿದ್ದೀ; ಎಲ್ಲಾ ದೇವರುಗಳ ಮೇಲೆ ಬಹಳವಾಗಿ ಹೆಚ್ಚಿಸಲ್ಪಟ್ಟಿದ್ದೀ.
97:10b.PSA.097.010 ಕರ್ತನನ್ನು ಪ್ರೀತಿಮಾಡುವವರು ಕೆಟ್ಟದ್ದನ್ನು ಹಗೆ ಮಾಡುವರು; ಆತನು ತನ್ನ ಪರಿಶುದ್ಧರ ಪ್ರಾಣ ಗಳನ್ನು ಕಾಪಾಡಿ ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವನು.
97:11b.PSA.097.011 ಬೆಳಕು ನೀತಿವಂತನಿಗೋಸ್ಕರವೂ ಸಂತೋಷವು ಯಥಾರ್ಥ ಹೃದಯದವರಿಗೋಸ್ಕರವೂ ಬಿತ್ತಲ್ಪಟ್ಟಿವೆ.ನೀತಿವಂತರೇ, ಕರ್ತನಲ್ಲಿ ಸಂತೋ ಷಿಸಿರಿ; ಆತನ ಪರಿಶುದ್ಧತ್ವವನ್ನು ಜ್ಞಾಪಕಮಾಡಿ ಕೊಂಡಾಡಿರಿ.
97:12b.PSA.097.012 ನೀತಿವಂತರೇ, ಕರ್ತನಲ್ಲಿ ಸಂತೋ ಷಿಸಿರಿ; ಆತನ ಪರಿಶುದ್ಧತ್ವವನ್ನು ಜ್ಞಾಪಕಮಾಡಿ ಕೊಂಡಾಡಿರಿ.
98
98:1b.PSA.098.001 ಕರ್ತನಿಗೆ ಹೊಸ ಹಾಡನ್ನು ಹಾಡಿರಿ; ಆತನು ಅದ್ಭುತಗಳನ್ನು ಮಾಡಿದ್ದಾನೆ; ಆತನ ಬಲಗೈಯೂ ಪರಿಶುದ್ಧತೋಳೂ ಆತನಿಗೆ ಜಯ ವನ್ನು ತಂದಿವೆ.
98:2b.PSA.098.002 ರ್ತನು ತನ್ನ ರಕ್ಷಣೆಯನ್ನು ತಿಳಿಯ ಮಾಡಿದ್ದಾನೆ; ತನ್ನ ನೀತಿಯನ್ನು ಜನಾಂಗಗಳ ದೃಷ್ಟಿಗೆ ಬಹಿರಂಗವಾಗಿ ಪ್ರಕಟಮಾಡಿದ್ದಾನೆ.
98:3b.PSA.098.003 ತನ್ನ ಕರುಣೆ ಯನ್ನೂ ಸತ್ಯತೆಯನ್ನೂ ಇಸ್ರಾಯೇಲಿನ ಮನೆಗೋಸ್ಕರ ಜ್ಞಾಪಕ ಮಾಡಿಕೊಂಡಿದ್ದಾನೆ; ಭೂಮಿಯ ಕೊನೆಗಳೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡಿವೆ.
98:4b.PSA.098.004 ಸಮಸ್ತ ಭೂಮಿಯೇ; ಕರ್ತನಿಗೆ ಉತ್ಸಾಹಧ್ವನಿ ಮಾಡಿರಿ, ಗಟ್ಟಿಯಾದ ಧ್ವನಿಯಿಂದ ಸಂತೋಷಿಸಿ ಕೀರ್ತಿಸಿರಿ.
98:5b.PSA.098.005 ಕರ್ತನಿಗೆ ಕಿನ್ನರಿಯಿಂದ, ಹೌದು, ಕಿನ್ನರಿ ಯಿಂದಲೂ ಕೀರ್ತನೆಯ ಸ್ವರದಿಂದಲೂ ಹಾಡಿರಿ.
98:6b.PSA.098.006 ತುತೂರಿಗಳಿಂದಲೂ ಹೌದು, ತುತೂರಿಯ ಶಬ್ಧ ದಿಂದಲೂ, ಅರಸನಾದ ಕರ್ತನ ಮುಂದೆ ಜಯಧ್ವನಿ ಮಾಡಿರಿ.
98:7b.PSA.098.007 ಸಮುದ್ರವೂ ಅದರ ಪರಿಪೂರ್ಣತೆಯೂ ಲೋಕ ವೂ ಅದರ ನಿವಾಸಿಗಳೂ ಘೋಷಿಸಲಿ.
98:8b.PSA.098.008 ಪ್ರವಾಹ ಗಳು ಕೈತಟ್ಟಲಿ; ಕರ್ತನ ಮುಂದೆ ಬೆಟ್ಟಗಳು ಕೂಡ ಉತ್ಸಾಹ ಧ್ವನಿಮಾಡಲಿ.ಆತನು ಭೂಮಿಗೆ ನ್ಯಾಯ ತೀರಿಸಲು ಬರುತ್ತಾನೆ. ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ನ್ಯಾಯದಲ್ಲಿಯೂ ತೀರ್ಪು ಕೊಡುವನು.
98:9b.PSA.098.009 ಆತನು ಭೂಮಿಗೆ ನ್ಯಾಯ ತೀರಿಸಲು ಬರುತ್ತಾನೆ. ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ನ್ಯಾಯದಲ್ಲಿಯೂ ತೀರ್ಪು ಕೊಡುವನು.
99
99:1b.PSA.099.001 ಕರ್ತನು ಆಳುತ್ತಾನೆ; ಜನಗಳು ನಡುಗಲಿ; ಆತನು ಕೆರೂಬಿಗಳ ಮಧ್ಯದಲ್ಲಿ ಕೂತಿ ದ್ದಾನೆ; ಭೂಮಿಯು ಕದಲಲಿ.
99:2b.PSA.099.002 ಕರ್ತನು ಚೀಯೋನಿನಲ್ಲಿ ದೊಡ್ಡವನಾಗಿಯೂ ಎಲ್ಲಾ ಜನಗಳ ಮೇಲೆ ಉನ್ನತನಾಗಿಯೂ ಇದ್ದಾನೆ.
99:3b.PSA.099.003 ನಿನ್ನ ಭಯಂಕರವಾದ ಹೆಸರನ್ನು ಅವರು ಕೊಂಡಾ ಡಲಿ; ಅದು ಪರಿಶುದ್ಧವಾದದ್ದೇ.
99:4b.PSA.099.004 ಅರಸನ ಬಲವು ನ್ಯಾಯವನ್ನು ಪ್ರೀತಿ ಮಾಡುತ್ತದೆ; ನೀನು ನೀತಿಯನ್ನು ಸ್ಥಿರಪಡಿಸುತ್ತೀ; ನ್ಯಾಯವನ್ನೂ ನೀತಿಯನ್ನೂ ಯಾಕೋ ಬಿನಲ್ಲಿ ನೀನು ಮಾಡಿದ್ದೀ.
99:5b.PSA.099.005 ನಮ್ಮ ದೇವರಾದ ಕರ್ತ ನನ್ನು ಉನ್ನತಪಡಿಸಿರಿ; ಆತನ ಪಾದ ಪೀಠದಲ್ಲಿ ಆರಾ ಧಿಸಿರಿ; ಆತನು ಪರಿಶುದ್ಧನೇ.
99:6b.PSA.099.006 ಆತನ ಯಾಜಕರಲ್ಲಿ ಮೋಶೆಯೂ ಆರೋನನೂ ಆತನ ಹೆಸರನ್ನು ಕರೆಯುವವರಲ್ಲಿ ಸಮುವೇಲನೂ; ಅವರು ಕರ್ತನನ್ನು ಕರೆದಾಗ ಆತನು ಅವರಿಗೆ ಉತ್ತರ ಕೊಟ್ಟನು.
99:7b.PSA.099.007 ಆತನು ಮೇಘಸ್ತಂಭದಲ್ಲಿಂದ ಅವರ ಸಂಗಡ ಮಾತನಾಡಿದನು; ಆತನ ಸಾಕ್ಷಿಗಳನ್ನೂ ಆತನು ಅವರಿಗೆ ಕೊಟ್ಟ ನಿಯಮಗಳನ್ನೂ ಅವರು ಕೈಕೊಂಡರು.
99:8b.PSA.099.008 ನಮ್ಮ ದೇವರಾದ ಓ ಕರ್ತನೇ, ನೀನು ಅವರಿಗೆ ಉತ್ತರಕೊಟ್ಟೆ; ಅವರ ಕೃತ್ಯಗಳಿಗೋಸ್ಕರ ನೀನು ಅವ ರಿಗೆ ಮುಯ್ಯಿಗೆ ಮುಯ್ಯಿ ಕೊಡುವಾತನಾಗಿದ್ದರೂ ಅವರನ್ನು ಕ್ಷಮಿಸುವ ದೇವರು ನೀನಾಗಿದ್ದೀ.ನಮ್ಮ ದೇವರಾದ ಕರ್ತನನ್ನು ಉನ್ನತಪಡಿಸಿರಿ; ಆತನ ಪರಿ ಶುದ್ಧ ಪರ್ವತದಲ್ಲಿ ಆರಾಧಿಸಿರಿ; ನಮ್ಮ ದೇವರಾದ ಕರ್ತನು ಪರಿಶುದ್ಧನೇ.
99:9b.PSA.099.009 ನಮ್ಮ ದೇವರಾದ ಕರ್ತನನ್ನು ಉನ್ನತಪಡಿಸಿರಿ; ಆತನ ಪರಿ ಶುದ್ಧ ಪರ್ವತದಲ್ಲಿ ಆರಾಧಿಸಿರಿ; ನಮ್ಮ ದೇವರಾದ ಕರ್ತನು ಪರಿಶುದ್ಧನೇ.
100
100:1b.PSA.100.001 ಸಮಸ್ತ ಭೂಮಿಯೇ, ಕರ್ತನಿಗೆ ಜಯಧ್ವನಿ ಮಾಡಿರಿ,
100:2b.PSA.100.002 ಸಂತೋಷ ದಿಂದ ಕರ್ತನನ್ನು ಸೇವಿಸಿರಿ; ಹಾಡುತ್ತಾ ಆತನ ಮುಂದೆ ಬನ್ನಿರಿ.
100:3b.PSA.100.003 ಕರ್ತನೇ ದೇವರೆಂದು ತಿಳುಕೊಳ್ಳಿರಿ; ನಾವಲ್ಲ, ಆತನೇ ನಮ್ಮನ್ನು ಉಂಟು ಮಾಡಿದ್ದಾನೆ; ನಾವು ಆತನ ಜನರೂ ಆತನ ಹುಲ್ಲುಗಾವಲಿನ ಮಂದೆಯೂ ಆಗಿದ್ದೇವೆ.
100:4b.PSA.100.004 ಕೃತಜ್ಞತೆಯಿಂದ ಆತನ ಬಾಗಿಲುಗಳಿಗೂ ಸ್ತೋತ್ರದಿಂದ ಆತನ ಅಂಗಳಗಳಿಗೂ ಬನ್ನಿರಿ; ಆತನನ್ನು ಕೊಂಡಾಡಿರಿ, ಆತನ ಹೆಸರನ್ನು ಸ್ತುತಿಸಿರಿ.ಕರ್ತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.
100:5b.PSA.100.005 ಕರ್ತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.
101
101:1b.PSA.101.001 ಕರುಣೆ ನೀತಿಗಳನ್ನು ಕುರಿತು ಹಾಡುವೆನು; ಓ ಕರ್ತನೇ, ನಿನ್ನನ್ನು ಕೀರ್ತಿ ಸುವೆನು.
101:2b.PSA.101.002 ಸಂಪೂರ್ಣವಾದ ಮಾರ್ಗದಲ್ಲಿ ಬುದ್ಧಿ ಯಿಂದ ನಡೆದು ಕೊಳ್ಳುವೆನು; ಯಾವಾಗ ನನ್ನ ಬಳಿಗೆ ಬರುವಿ? ನನ್ನ ಹೃದಯದ ಸಂಪೂರ್ಣತೆಯಿಂದ ನನ್ನ ಮನೆಯೊಳಗೆ ನಡೆದುಕೊಳ್ಳುವೆನು.
101:3b.PSA.101.003 ಕೆಟ್ಟ ಕಾರ್ಯ ವನ್ನು ನನ್ನ ಕಣ್ಣುಗಳ ಮುಂದೆ ನಾನು ಇಡುವದಿಲ್ಲ; ಅಕ್ರಮಗಾರರ ಕೆಲಸವನ್ನು ಹಗೆ ಮಾಡುತ್ತೇನೆ; ಅದು ನನಗೆ ಅಂಟಿಕೊಳ್ಳದು.
101:4b.PSA.101.004 ಡೊಂಕಾದ ಹೃದಯವು ನನ್ನನ್ನು ಬಿಟ್ಟು ಹೋಗುವದು; ಕೆಟ್ಟವನನ್ನು ತಿಳಿಯು ವದಿಲ್ಲ.
101:5b.PSA.101.005 ಮರೆಯಾಗಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಗರ್ವದ ಕಣ್ಣೂ ಅಹಂಕಾರದ ಹೃದಯವೂ ಉಳ್ಳವನನ್ನು ತಾಳಲಾರೆನು.
101:6b.PSA.101.006 ದೇಶದಲ್ಲಿರುವ ನಂಬಿಗಸ್ತರು ನನ್ನ ಸಂಗಡ ವಾಸಿ ಸುವ ಹಾಗೆ ನನ್ನ ಕಣ್ಣುಗಳು ಅವರ ಮೇಲೆ ಅವೆ; ಸಂಪೂರ್ಣವಾದ ಮಾರ್ಗದಲ್ಲಿ ನಡೆದು ಕೊಳ್ಳುವ ವನೇ ನನ್ನನ್ನು ಸೇವಿಸುವನು.
101:7b.PSA.101.007 ಮೋಸ ಮಾಡುವವನು ನನ್ನ ಮನೆಯೊಳಗೆ ವಾಸಮಾಡನು; ಸುಳ್ಳಾಡುವವನು ನನ್ನ ಕಣ್ಣುಗಳ ಮುಂದೆ ನೆಲೆಯಾಗಿರುವದಿಲ್ಲ;ದುಷ್ಟ ತನ ಮಾಡುವವರೆಲ್ಲರನ್ನು ಕರ್ತನ ಪಟ್ಟಣದೊಳ ಗಿಂದ ಕಡಿದು ಬಿಡುವ ಹಾಗೆ ಬೆಳಿಗ್ಗೆ ದೇಶದ ದುಷ್ಟ ರೆಲ್ಲರನ್ನು ಸಂಹರಿಸುವೆನು.
101:8b.PSA.101.008 ದುಷ್ಟ ತನ ಮಾಡುವವರೆಲ್ಲರನ್ನು ಕರ್ತನ ಪಟ್ಟಣದೊಳ ಗಿಂದ ಕಡಿದು ಬಿಡುವ ಹಾಗೆ ಬೆಳಿಗ್ಗೆ ದೇಶದ ದುಷ್ಟ ರೆಲ್ಲರನ್ನು ಸಂಹರಿಸುವೆನು.
102
102:1b.PSA.102.001 ಓ ಕರ್ತನೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ಮೊರೆಯು ನಿನ್ನ ಬಳಿಗೆ ಸೇರಲಿ.
102:2b.PSA.102.002 ನನಗೆ ಇಕ್ಕಟ್ಟು ಇರುವ ದಿವಸದಲ್ಲಿ ನಿನ್ನ ಮುಖವನ್ನು ನನಗೆ ಮರೆಮಾಡಬೇಡ; ನಿನ್ನ ಕಿವಿಯನ್ನು ನನ್ನ ಕಡೆಗೆ ತಿರುಗಿಸು; ನಾನು ಕರೆಯುವ ದಿವಸದಲ್ಲಿ ಬೇಗ ನನಗೆ ಉತ್ತರ ಕೊಡು.
102:3b.PSA.102.003 ನನ್ನ ದಿವಸಗಳು ಹೊಗೆಯಂತೆ ಕಳೆದುಹೋಗು ತ್ತವೆ; ನನ್ನ ಎಲುಬುಗಳು ಕೊಳ್ಳಿಯ ಹಾಗೆ ಸುಟ್ಟು ಹೋಗಿವೆ.
102:4b.PSA.102.004 ನನ್ನ ಹೃದಯವು ಹೊಡೆಯಲ್ಪಟ್ಟ ಹುಲ್ಲಿನ ಹಾಗೆ ಒಣಗಿಹೋಗಿದೆ; ಆದದರಿಂದ ನಾನು ನನ್ನ ರೊಟ್ಟಿಯನ್ನು ತಿನ್ನುವದಕ್ಕೆ ಮರೆತುಬಿಡುತ್ತೇನೆ.
102:5b.PSA.102.005 ನನ್ನ ಮೂಲುಗುವಿಕೆಯ ಸ್ವರದಿಂದ ಎಲುಬುಗಳು ನನ್ನ ಮಾಂಸಕ್ಕೆ ಅಂಟುತ್ತವೆ.
102:6b.PSA.102.006 ನಾನು ಅರಣ್ಯದ ಬಕಕ್ಕೆ ಸಮಾನನಾಗಿದ್ದೇನೆ; ನಾನು ಅರಣ್ಯದ ಗೂಬೆಯ ಹಾಗಿದ್ದೇನೆ.
102:7b.PSA.102.007 ನಾನು ಎಚ್ಚರವಾಗಿದ್ದೂ; ಮಾಳಿಗೆಯ ಮೇಲಿರುವ ಒಂಟಿಯಾದ ಪಕ್ಷಿಯ ಹಾಗಿದ್ದೇನೆ.
102:8b.PSA.102.008 ದಿನವೆಲ್ಲಾ ನನ್ನ ಶತ್ರುಗಳು ನನ್ನನ್ನು ನಿಂದಿಸುತ್ತಾರೆ; ನನ್ನ ಮೇಲೆ ಕೋಪಿಸಿಕೊಳ್ಳುವವರು ನನಗೆ ವಿರೋಧ ವಾಗಿ ಆಣೆ ಇಡುತ್ತಾರೆ.
102:9b.PSA.102.009 ನಿನ್ನ ರೋಷದ ಮತ್ತು ನಿನ್ನ ರೌದ್ರದ ನಿಮಿತ್ತವೇ ಬೂದಿಯನ್ನು ರೊಟ್ಟಿಯಂತೆ ತಿಂದಿದ್ದೇನೆ; ನನ್ನ ಪಾನವನ್ನು ಕಣ್ಣೀರಿನಿಂದ ಬೆರೆಸಿ ದ್ದೇನೆ.
102:10b.PSA.102.010 ನನ್ನನ್ನು ನೀನು ಎತ್ತಿ ಕೆಡವಿ ಹಾಕಿದ್ದೀ;
102:11b.PSA.102.011 ನನ್ನ ದಿವಸಗಳು ನೀಳದ ನೆರಳಿನ ಹಾಗಿವೆ; ನಾನು ಹುಲ್ಲಿನ ಹಾಗೆ ಒಣಗುತ್ತೇನೆ.
102:12b.PSA.102.012 ಆದರೆ ಓ ಕರ್ತನೇ, ನೀನು ಎಂದೆಂದಿಗೂ ಇರುವವನಾಗಿದ್ದೀ, ನಿನ್ನ ಸ್ಮರಣೆಯು ತಲತಲಾಂತ ರಕ್ಕೂ ಅದೆ.
102:13b.PSA.102.013 ನೀನು ಎದ್ದು, ಚೀಯೋನನ್ನು ಕನಿ ಕರಿಸುವಿ; ಯಾಕಂದರೆ ಅದನ್ನು ಕರುಣಿಸುವದಕ್ಕೆ ಕಾಲವಾಯಿತು; ಹೌದು ನಿರ್ಣಯಿಸಿದ ಸಮಯವು ಬಂದಿದೆ.
102:14b.PSA.102.014 ನಿನ್ನ ಸೇವಕರು ಅದರ ಕಲ್ಲುಗಳಲ್ಲಿ ಇಷ್ಟಪಡುತ್ತಾರೆ. ಅದರ ಧೂಳನ್ನು ಕರುಣಿಸುತ್ತಾರೆ.
102:15b.PSA.102.015 ಜನಾಂಗವು ಕರ್ತನ ಹೆಸರಿಗೂ ಭೂರಾಜರೆಲ್ಲರು ನಿನ್ನ ಮಹಿಮೆಗೂ ಭಯಪಡುವರು.
102:16b.PSA.102.016 ಕರ್ತನು ಚೀಯೋನನ್ನು ಕಟ್ಟುವನು; ಆತನು ತನ್ನ ಮಹಿಮೆಯಲ್ಲಿ ಕಾಣಿಸಿಕೊಳ್ಳುವನು.
102:17b.PSA.102.017 ದಿಕ್ಕಿಲ್ಲದವನ ಪ್ರಾರ್ಥನೆಗೆ ಕಿವಿಗೊಡುತ್ತಾನೆ; ಅವರ ಪ್ರಾರ್ಥನೆಯನ್ನು ತಿರಸ್ಕರಿ ಸುವದಿಲ್ಲ.
102:18b.PSA.102.018 ಇದು ಮುಂದಿನ ಸಂತತಿಗೋಸ್ಕರ ಬರೆಯಲ್ಪಡುವದು; ಹುಟ್ಟಲಿಕ್ಕಿರುವ ಜನರು ಕರ್ತನನ್ನು ಸ್ತುತಿಸುವರು.
102:19b.PSA.102.019 ಜನಾಂಗಗಳೂ ರಾಜ್ಯಗಳೂ ಕರ್ತ ನನ್ನು ಸೇವಿಸುವದಕ್ಕೆ ಒಟ್ಟಾಗಿ ಕೂಡಿ ಬರುವಾಗ
102:20b.PSA.102.020 ಚೀಯೋನಿನಲ್ಲಿ ಕರ್ತನ ಹೆಸರೂ ಯೆರೂಸಲೇಮಿ ನಲ್ಲಿ ಆತನ ಸ್ತೋತ್ರವೂ ಸಾರಲ್ಪಡುವ ಹಾಗೆ.
102:21b.PSA.102.021 ಕರ್ತನು ಸೆರೆಯವರ ನರಳುವಿಕೆಯನ್ನು ಕೇಳುವ ದಕ್ಕೂ ಮರಣಕ್ಕೆ ನೇಮಕವಾದವರನ್ನು ಬಿಡಿಸು ವದಕ್ಕೂ
102:22b.PSA.102.022 ತನ್ನ ಪರಿಶುದ್ಧವಾದ ಉನ್ನತ ಸ್ಥಳದಿಂದ ಕಣ್ಣಿಟ್ಟು ಆಕಾಶದಿಂದ ಭೂಮಿಯನ್ನು ನೋಡಿದ್ದಾನೆ.
102:23b.PSA.102.023 ಆತನು ನನ್ನ ಶಕ್ತಿಯನ್ನು ಮಾರ್ಗದಲ್ಲಿ ಕುಂದಿಸಿ ನನ್ನ ದಿವಸಗಳನ್ನು ಕಡಿಮೆ ಮಾಡಿದನು.
102:24b.PSA.102.024 ಓ ನನ್ನ ದೇವರೇ, ನನ್ನ ದಿವಸಗಳ ಮಧ್ಯದಲ್ಲಿ ನನ್ನನ್ನು ಒಯ್ಯಬೇಡ; ನಿನ್ನ ವರುಷಗಳು ತಲತಲಾಂತರಗಳಿಗೂ ಅವೆ ಅಂದೆನು.
102:25b.PSA.102.025 ನೀನು ಪೂರ್ವಕಾಲದಲ್ಲಿ ಭೂಮಿ ಯನ್ನು ಸ್ಥಾಪಿಸಿದಿ; ಆಕಾಶಗಳು ನಿನ್ನ ಕೈ ಕೆಲಸಗಳಾ ಗಿವೆ.
102:26b.PSA.102.026 ಅವು ನಾಶವಾಗುವವು; ಆದರೆ ನೀನು ಸ್ಥಿರ ವಾಗಿರುತ್ತೀ; ಹೌದು, ಅವುಗಳೆಲ್ಲಾ ವಸ್ತ್ರದ ಹಾಗೆ ಜೀರ್ಣವಾಗುವವು; ಉಡುಪಿನ ಹಾಗೆ ಅವುಗ ಳನ್ನು ಬದಲಾಯಿಸುವಿ; ಆಗ ಅವು ಬದಲಾಗುವವು.
102:27b.PSA.102.027 ಆದರೆ ನೀನು ಏಕ ರೀತಿಯಾಗಿರುತ್ತೀ; ನಿನ್ನ ವರುಷಗಳು ಮುಗಿಯವು.ನಿನ್ನ ಸೇವಕರ ಮಕ್ಕಳು ನೆಲೆಯಾಗಿದ್ದು ಅವರ ಸಂತತಿಯು ನಿನ್ನ ಮುಂದೆ ಸ್ಥಾಪಿಸಲ್ಪಡುವದು.
102:28b.PSA.102.028 ನಿನ್ನ ಸೇವಕರ ಮಕ್ಕಳು ನೆಲೆಯಾಗಿದ್ದು ಅವರ ಸಂತತಿಯು ನಿನ್ನ ಮುಂದೆ ಸ್ಥಾಪಿಸಲ್ಪಡುವದು.
103
103:1b.PSA.103.001 ಓ ನನ್ನ ಮನವೇ, ಕರ್ತನನ್ನೂ ನನ್ನ ಎಲ್ಲಾ ಅಂತರಂಗವೇ, ಆತನ ಪರಿಶುದ್ಧವಾದ ಹೆಸರನ್ನೂ ಸ್ತುತಿಸು.
103:2b.PSA.103.002 ಓ ನನ್ನ ಮನವೇ, ಕರ್ತನನ್ನು ಸ್ತುತಿಸು. ಆತನ ಉಪಕಾರಗಳಲ್ಲಿ ಒಂದನ್ನೂ ಮರೆತುಬಿಡಬೇಡ.
103:3b.PSA.103.003 ಆತನು ನಿನ್ನ ಅಪ ರಾಧಗಳನ್ನೆಲ್ಲಾ ಮನ್ನಿಸಿ ನಿನ್ನ ರೋಗಗಳನ್ನೆಲ್ಲಾ ಸ್ವಸ್ಥ ಮಾಡಿ
103:4b.PSA.103.004 ನಿನ್ನ ಜೀವವನ್ನು ನಾಶದೊಳಗಿಂದ ವಿಮೋ ಚಿಸಿ ಪ್ರೀತಿ ಕೃಪೆಯನ್ನೂ ಅಂತಃಕರಣಗಳನ್ನೂ ನಿನಗೆ ಕಿರೀಟವಾಗಿ ಇಟ್ಟು
103:5b.PSA.103.005 ನಿನ್ನ ಯೌವನವು ಹದ್ದಿನಂತೆ ಹೊಸದಾಗುವ ಹಾಗೆ ನಿನ್ನ ಬಾಯಿಯನ್ನು ಒಳ್ಳೇದ ರಿಂದ ತೃಪ್ತಿಪಡಿಸುತ್ತಾನೆ.
103:6b.PSA.103.006 ಕುಗ್ಗಿಸಲ್ಪಡುವವರೆಲ್ಲರಿಗೆ ಕರ್ತನು ನೀತಿಯನ್ನೂ ನ್ಯಾಯವನ್ನೂ ನಡಿಸುತ್ತಾನೆ.
103:7b.PSA.103.007 ಆತನು ತನ್ನ ಮಾರ್ಗಗಳನ್ನು ಮೋಶೆಗೂ ತನ್ನ ಕ್ರಿಯೆಗಳನ್ನು ಇಸ್ರಾಯೇಲಿನ ಮಕ್ಕಳಿಗೂ ತಿಳಿಯಮಾಡಿದನು.
103:8b.PSA.103.008 ಕರ್ತನು ಅಂತಃಕರಣವೂ ದಯೆಯೂ ದೀರ್ಘಶಾಂತಿಯೂ ಬಹಳ ಕೃಪೆಯೂ ಉಳ್ಳವನಾಗಿದ್ದಾನೆ.
103:9b.PSA.103.009 ಆತನು ಸದಾಕಾಲಕ್ಕೂ ಗದರಿಸುವದಿಲ್ಲ; ನಿತ್ಯವೂ ಕೋಪಿ ಸುವಾತನಲ್ಲ;
103:10b.PSA.103.010 ನಮ್ಮ ಪಾಪಗಳಿಗೆ ತಕ್ಕಂತೆ ನಮಗೆ ಶಿಕ್ಷಿಸಲಿಲ್ಲ; ನಮ್ಮ ಅಪರಾಧಗಳ ಪ್ರಕಾರ ನಮ್ಮನ್ನು ದಂಡಿಸಲಿಲ್ಲ.
103:11b.PSA.103.011 ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ ಆತನ ಕೃಪೆಯು ಆತನಿಗೆ ಭಯಪಡುವವರ ಮೇಲೆ ಅಷ್ಟು ಅಪಾರವಾಗಿದೆ.
103:12b.PSA.103.012 ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟು ದೂರವೋ ನಮ್ಮ ದ್ರೋಹಗಳನ್ನು ನಮ್ಮಿಂದ ಅಷ್ಟು ದೂರ ಮಾಡಿದ್ದಾನೆ.
103:13b.PSA.103.013 ತಂದೆಯು ಮಕ್ಕಳ ಮೇಲೆ ಅಂತಃಕರಣ ಪಡುವ ಪ್ರಕಾರ ಕರ್ತನು ತನಗೆ ಭಯಪಡುವವರ ಮೇಲೆ ಅಂತಃಕರಣಪಡುವವನಾಗಿದ್ದಾನೆ.
103:14b.PSA.103.014 ಆತನು ನಮ್ಮ ಪ್ರಕೃತಿಯನ್ನು ತಿಳುಕೊಂಡು ನಾವು ಧೂಳಿ ಯಾಗಿದ್ದೇವೆಂದು ಜ್ಞಾಪಕಮಾಡಿಕೊಳ್ಳುತ್ತಾನೆ;
103:15b.PSA.103.015 ಮನುಷ್ಯನ ದಿವಸಗಳೋ ಹುಲ್ಲಿನ ಹಾಗೆ ಅವೆ; ಅವನು ಹೊಲದ ಹೂವಿನ ಹಾಗೆಯೇ ಶೋಭಿಸುತ್ತಾನೆ.
103:16b.PSA.103.016 ಆದಾಗ್ಯೂ ಗಾಳಿಯು ಅದರ ಮೇಲೆ ಬೀಸುತ್ತಲೇ ಅದು ಇಲ್ಲದೆ ಹೋಗುತ್ತದೆ; ಅದರ ಸ್ಥಳವು ಅದನ್ನು ಇನ್ನು ಅರಿಯದು.
103:17b.PSA.103.017 ಆದರೆ ಕರ್ತನ ಕೃಪೆಯು ಆತನಿಗೆ ಭಯಪಡುವವರ ಮೇಲೆಯೂ ಆತನ ನೀತಿಯು ಮಕ್ಕಳ ಮಕ್ಕಳಿಗೂ
103:18b.PSA.103.018 ಆತನ ಒಡಂಬಡಿಕೆಯನ್ನು ಕೈಕೊಂಡು ಆತನ ಕಟ್ಟಳೆಗಳನ್ನು ನೆನಸಿ ಅದರಂತೆ ಮಾಡುವವರಿಗೂ ನಿತ್ಯತ್ವದಿಂದ ನಿತ್ಯತ್ವಕ್ಕೂ ಇರುವದು.
103:19b.PSA.103.019 ಕರ್ತನು ಆಕಾಶಗಳಲ್ಲಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ; ಆತನ ರಾಜ್ಯವು ಎಲ್ಲರ ಮೇಲೆ ಆಳುತ್ತದೆ.
103:20b.PSA.103.020 ಆತನ ದೂತರೇ, ಆತನ ಮಾತಿನ ಸ್ವರವನ್ನು ಕೇಳಿ, ಆತನ ಆಜ್ಞೆಗಳನ್ನು ನಡಿಸುವ ಶ್ರೇಷ್ಠರಾದ ಶೂರರೇ,
103:21b.PSA.103.021 ಕರ್ತನನ್ನು ಸ್ತುತಿಸಿರಿ. ಆತನ ಎಲ್ಲಾ ಸೈನ್ಯಗಳೇ, ಆತನ ಇಷ್ಟವನ್ನು ನಡಿಸುವ ಆತನ ಸೇವಕರೇ, ಕರ್ತನನ್ನು ಸ್ತುತಿಸಿರಿ.ಆತನ ಆಳಿಕೆಯ ಎಲ್ಲಾ ಸ್ಥಳಗಳಲ್ಲಿ ಇರುವ ಆತನ ಎಲ್ಲಾ ಕೆಲಸಗಳೇ. ಕರ್ತನನ್ನು ಸ್ತುತಿಸಿರಿ. ನನ್ನ ಮನವೇ, ಕರ್ತನನ್ನು ಸ್ತುತಿಸು.
103:22b.PSA.103.022 ಆತನ ಆಳಿಕೆಯ ಎಲ್ಲಾ ಸ್ಥಳಗಳಲ್ಲಿ ಇರುವ ಆತನ ಎಲ್ಲಾ ಕೆಲಸಗಳೇ. ಕರ್ತನನ್ನು ಸ್ತುತಿಸಿರಿ. ನನ್ನ ಮನವೇ, ಕರ್ತನನ್ನು ಸ್ತುತಿಸು.
104
104:1b.PSA.104.001 ಓ ನನ್ನ ಮನವೇ, ಕರ್ತನನ್ನು ಸ್ತುತಿಸು; ನನ್ನ ದೇವರಾದ ಓ ಕರ್ತನೇ, ನೀನು ಬಹಳ ದೊಡ್ಡವನಾಗಿದ್ದು ಗೌರವ ವನ್ನೂ ಪ್ರಭೆಯನ್ನೂ ಹೊದ್ದುಕೊಂಡಿದ್ದೀ.
104:2b.PSA.104.002 ಆತನು ವಸ್ತ್ರದ ಹಾಗೆ ಬೆಳಕನ್ನು ಧರಿಸಿಕೊಳ್ಳುವಾತನೂ ಆಕಾಶ ವನ್ನು ಪರದೆ ಹಾಗೆ ಹಾಸುವಾತನೂ ಆಗಿದ್ದಾನೆ.
104:3b.PSA.104.003 ಆತನು ನೀರುಗಳಲ್ಲಿ ತನ್ನ ಉಪ್ಪರಿಗೆಗಳ ತೊಲೆಗಳನ್ನು ಇರಿಸುತ್ತಾನೆ; ಮೋಡಗಳನ್ನು ತನ್ನ ರಥವಾಗಿ ಮಾಡು ತ್ತಾನೆ. ಗಾಳಿಯ ರೆಕ್ಕೆಗಳ ಮೇಲೆ ನಡೆದು ಹೋಗು ತ್ತಾನೆ.
104:4b.PSA.104.004 ಆತನು ತನ್ನ ದೂತರನ್ನು ಆತ್ಮಗಳನ್ನಾಗಿಯೂ ಉರಿಯುವ ಬೆಂಕಿಯನ್ನು ತನ್ನ ಸೇವಕರನ್ನಾಗಿಯೂ ಮಾಡುತ್ತಾನೆ.
104:5b.PSA.104.005 ಯುಗಯುಗಾಂತರಗಳಿಗೂ ಅದು ಕದಲದ ಹಾಗೆ ಭೂಮಿಯನ್ನು ಅದರ ಅಸ್ತಿವಾರಗಳ ಮೇಲೆ ಆತನು ಸ್ಥಾಪಿಸಿದನು.
104:6b.PSA.104.006 ನೀನು ಜಲಾಗಾಧದಿಂದ ವಸ್ತ್ರದ ಹಾಗೆ ಅದನ್ನು ಮುಚ್ಚಿದ್ದೀ; ಬೆಟ್ಟಗಳ ಮೇಲೆ ನೀರುಗಳು ನಿಂತವು.
104:7b.PSA.104.007 ಅವು ನಿನ್ನ ಗದರಿಕೆಯಿಂದ ಓಡಿಹೋದವು; ನಿನ್ನ ಗುಡುಗಿನ ಶಬ್ದದಿಂದ ಅವು ಓಡಿಹೋದವು.
104:8b.PSA.104.008 ಬೆಟ್ಟ ಗಳಿಗೆ ಏರಿ, ತಗ್ಗುಗಳಿಗೆ ಇಳಿದು, ನೀನು ಅವುಗಳಿಗೆ ಸ್ಥಾಪಿಸಿದ ಸ್ಥಳಕ್ಕೆ ಹೋದವು.
104:9b.PSA.104.009 ಅವು ದಾಟದ ಹಾಗೆಯೂ ಭೂಮಿಯನ್ನು ಮುಚ್ಚುವದಕ್ಕೆ ತಿರಿಗಿ ಬಾರದ ಹಾಗೆಯೂ ಮೇರೆಯನ್ನು ಇಟ್ಟಿದ್ದೀ.
104:10b.PSA.104.010 ಬುಗ್ಗೆ ಗಳನ್ನು ಹಳ್ಳಗಳಿಗೆ ಕಳುಹಿಸುತ್ತೀ; ಅವು ಬೆಟ್ಟಗಳ ನಡುವೆ ಹರಿಯುತ್ತವೆ;
104:11b.PSA.104.011 ಕಾಡಿನ ಮೃಗಗಳಿಗೆಲ್ಲಾ ಅವು ನೀರು ಕುಡಿಸುತ್ತವೆ; ಕಾಡು ಕತ್ತೆಗಳು ತಮ್ಮ ದಾಹವನ್ನು ತೀರಿಸಿಕೊಳ್ಳುತ್ತವೆ.
104:12b.PSA.104.012 ಆಕಾಶದ ಪಕ್ಷಿಗಳು ಅವುಗಳ ಹತ್ತಿರ ವಾಸವಾಗಿದ್ದು ಕೊಂಬೆಗಳ ಮಧ್ಯ ದಲ್ಲಿಂದ ಹಾಡುತ್ತವೆ.
104:13b.PSA.104.013 ಬೆಟ್ಟಗಳಿಗೆ ತನ್ನ ಉಪ್ಪರಿಗೆ ಗಳೊಳಗಿಂದ ನೀರು ಹಾಕುತ್ತಾನೆ; ತನ್ನ ಕೆಲಸಗಳ ಫಲದಿಂದ ಭೂಮಿಯು ತೃಪ್ತಿಯಾಗುತ್ತದೆ.
104:14b.PSA.104.014 ಆತನು ಪಶುಗಳಿಗೋಸ್ಕರ ಹುಲ್ಲನ್ನೂ ಮನುಷ್ಯನ ಸೇವೆ ಗೋಸ್ಕರ ಪಲ್ಯಗಳನ್ನೂ ಮೊಳಿಸುತ್ತಾನೆ; ಹೀಗೆ ಭೂಮಿಯೊಳಗಿಂದ ಆಹಾರವನ್ನು ಬರಮಾಡುತ್ತಾನೆ.
104:15b.PSA.104.015 ದ್ರಾಕ್ಷಾರಸವು ಮನುಷ್ಯನ ಹೃದಯವನ್ನು ಸಂತೋಷ ಪಡಿಸುತ್ತದೆ; ಎಣ್ಣೆಯು ಅವನ ಮುಖವನ್ನು ಪ್ರಕಾ ಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಹೃದಯವನ್ನು ಬಲಪಡಿಸುತ್ತದೆ.
104:16b.PSA.104.016 ಆತನು ನೆಟ್ಟ ಕರ್ತನ ಮರಗಳಾದ ಲೆಬನೋನಿನ ದೇವದಾರುಗಳು ತೃಪ್ತಿ ಯಾಗುತ್ತವೆ.
104:17b.PSA.104.017 ಅಲ್ಲಿ ಹಕ್ಕಿಗಳು ಗೂಡು ಕಟ್ಟುತ್ತವೆ; ಬಕದ ಮನೆಯು ತುರಾಯಿ ಗಿಡಗಳಲ್ಲಿ ಅದೆ.
104:18b.PSA.104.018 ಎತ್ತರವಾದ ಬೆಟ್ಟಗಳು ಕಾಡುಮೇಕೆಗಳಿಗೆ, ಬಂಡೆ ಗಳು ಮೊಲಗಳಿಗೆ ಆಶ್ರಯವಾಗಿವೆ.
104:19b.PSA.104.019 ನೇಮಿಸಿದ ಕಾಲಗಳಿಗೋಸ್ಕರ ಚಂದ್ರನನ್ನು ಉಂಟು ಮಾಡಿದ್ದಾನೆ; ಸೂರ್ಯನು ತನ್ನ ಅಸ್ತಮಾನ ವನ್ನು ತಿಳಿದಿದ್ದಾನೆ.
104:20b.PSA.104.020 ನೀನು ಕತ್ತಲನ್ನು ಬರಮಾಡುತ್ತೀ; ಆಗ ರಾತ್ರಿಯಾಗುತ್ತದೆ; ಅದರಲ್ಲಿ ಅಡವಿಯ ಮೃಗ ಗಳೆಲ್ಲಾ ಸಂಚರಿಸುತ್ತವೆ.
104:21b.PSA.104.021 ಸಿಂಹದ ಮರಿಗಳು ಬೇಟೆ ಗೋಸ್ಕರವೂ ದೇವರಿಂದ ತಮ್ಮ ಆಹಾರವನ್ನು ಹುಡು ಕುವದಕ್ಕೋಸ್ಕರವೂ ಗರ್ಜಿಸುತ್ತವೆ.
104:22b.PSA.104.022 ಸೂರ್ಯನು ಹುಟ್ಟಲು ಅವು ಕೂಡಿ ಬಂದು ತಮ್ಮ ಗವಿಗಳಲ್ಲಿ ಮಲಗುತ್ತವೆ.
104:23b.PSA.104.023 ಮನುಷ್ಯನು ತನ್ನ ಕೆಲಸಕ್ಕೂ ಸಾಯಂ ಕಾಲದ ವರೆಗೆ ತನ್ನ ಪ್ರಯಾಸಕ್ಕೂ ಹೊರಡುತ್ತಾನೆ.
104:24b.PSA.104.024 ಓ ಕರ್ತನೇ, ನಿನ್ನ ಕೆಲಸಗಳು ಎಷ್ಟೋ ಉಂಟು! ಅವುಗಳನ್ನೆಲ್ಲಾ ಜ್ಞಾನದಿಂದ ಉಂಟು ಮಾಡಿದ್ದೀ; ಭೂಮಿಯು ನಿನ್ನ ಸಂಪತ್ತಿನಿಂದ ತುಂಬಿದೆ.
104:25b.PSA.104.025 ದೊಡ್ಡದೂ ವಿಶಾಲವಾದದ್ದೂ ಆದ ಸಮುದ್ರವದೆ; ಅದರಲ್ಲಿ ಲೆಕ್ಕವಿಲ್ಲದ ಜೀವಜಂತುಗಳೂ ಸಣ್ಣ ದೊಡ್ಡ ಮೃಗಗಳೂ ಅವೆ.
104:26b.PSA.104.026 ಅದರಲ್ಲಿ ಹಡಗುಗಳು ಹೋಗು ತ್ತವೆ; ಅದರಲ್ಲಿ ಆಡುವದಕ್ಕೆ ನೀನು ರೂಪಿಸಿದ ಲೆವಿ ಯಾತಾನವು ಅದೆ.
104:27b.PSA.104.027 ನೀನು ಅವುಗಳ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುವಹಾಗೆ ಅವುಗಳೆಲ್ಲಾ ನಿನ್ನನ್ನು ಕಾದುಕೊಳ್ಳುತ್ತವೆ.
104:28b.PSA.104.028 ನೀನು ಅವುಗಳಿಗೆ ಕೊಡಲು ಅವು ಕೂಡಿಸುತ್ತವೆ; ನೀನು ನಿನ್ನ ಕೈ ತೆರೆಯಲು ಒಳ್ಳೇ ದರಿಂದ ತೃಪ್ತಿಯಾಗುತ್ತವೆ.
104:29b.PSA.104.029 ನೀನು ನಿನ್ನ ಮುಖವನ್ನು ಮರೆಮಾಡಲು ತಲ್ಲಣಿಸುತ್ತವೆ; ನೀನು ಅವುಗಳ ಶ್ವಾಸವನ್ನು ತೆಗೆದು ಬಿಡಲು, ಅವು ಸತ್ತುಹೋಗಿ, ತಮ್ಮ ಧೂಳಿಗೆ ತಿರುಗುತ್ತವೆ.
104:30b.PSA.104.030 ನೀನು ನಿನ್ನ ಶ್ವಾಸ ವನ್ನು ಕಳುಹಿಸಲು ಅವು ನಿರ್ಮಿಸಲ್ಪಡುತ್ತವೆ; ನೀನು ಭೂಮಿಯ ಮುಖವನ್ನು ಹೊಸದಾಗಿ ಮಾಡುತ್ತೀ.
104:31b.PSA.104.031 ಕರ್ತನ ಮಹಿಮೆಯು ಯುಗಯುಗಕ್ಕೂ ಇರಲಿ; ಕರ್ತನು ತನ್ನ ಕೆಲಸಗಳಲ್ಲಿ ಸಂತೋಷಪಡಲಿ.
104:32b.PSA.104.032 ಆತನು ಭೂಮಿಯನ್ನು ದೃಷ್ಟಿಸಲು ಅದು ನಡು ಗುತ್ತದೆ; ಬೆಟ್ಟಗಳನ್ನು ಮುಟ್ಟಲು ಅವು ಹೊಗೆ ಹಾಯುತ್ತವೆ.
104:33b.PSA.104.033 ನಾನು ಜೀವಿತಕಾಲವೆಲ್ಲಾ ಕರ್ತನಿಗೆ ಹಾಡು ವೆನು ನಾನು ಇರುವ ವರೆಗೆ ದೇವರನ್ನು ಕೀರ್ತಿಸುವೆನು.
104:34b.PSA.104.034 ಆತನ ವಿಷಯವಾದ ನನ್ನ ಧ್ಯಾನವು ಸಿಹಿಯಾಗಿ ರುವದು; ನಾನು ಕರ್ತನಲ್ಲಿ ಸಂತೋಷಪಡುವೆನು.ಪಾಪಾತ್ಮರು ಭೂಮಿಯೊಳಗಿಂದ ನಾಶವಾಗಲಿ; ದುಷ್ಟರು ಇಲ್ಲದೆ ಹೋಗಲಿ; ಓ ನನ್ನ ಮನವೇ, ಕರ್ತನನ್ನು ಸ್ತುತಿಸು; ಕರ್ತನನ್ನು ಕೊಂಡಾಡಿರಿ.
104:35b.PSA.104.035 ಪಾಪಾತ್ಮರು ಭೂಮಿಯೊಳಗಿಂದ ನಾಶವಾಗಲಿ; ದುಷ್ಟರು ಇಲ್ಲದೆ ಹೋಗಲಿ; ಓ ನನ್ನ ಮನವೇ, ಕರ್ತನನ್ನು ಸ್ತುತಿಸು; ಕರ್ತನನ್ನು ಕೊಂಡಾಡಿರಿ.
105
105:1b.PSA.105.001 ಕರ್ತನಿಗೆ ಉಪಕಾರ ಸ್ತುತಿಮಾಡಿರಿ; ಆತನ ಹೆಸರನ್ನು ಕರೆಯಿರಿ; ಜನ ಗಳಲ್ಲಿ ಆತನ ಕ್ರಿಯೆಗಳನ್ನು ತಿಳಿಯಮಾಡಿರಿ.
105:2b.PSA.105.002 ಆತನಿಗೆ ಹಾಡಿರಿ, ಆತನಿಗೆ ಕೀರ್ತನೆ ಹಾಡಿರಿ; ಆತನ ಅದ್ಭುತ ಕ್ರಿಯೆಗಳ ವಿಷಯವಾಗಿ ಮಾತನಾಡಿರಿ.
105:3b.PSA.105.003 ಆತನ ಪರಿಶುದ್ಧ ನಾಮದಲ್ಲಿ ಹೊಗಳಿಕೊಳ್ಳಿರಿ; ಕರ್ತನನ್ನು ಹುಡುಕುವವರ ಹೃದಯವು ಸಂತೋಷಿಸಲಿ.
105:4b.PSA.105.004 ಕರ್ತನನ್ನೂ ಆತನ ಬಲವನ್ನೂ ಹುಡುಕಿರಿ. ಆತನ ಮುಖ ವನ್ನು ಯಾವಾಗಲೂ ಹುಡುಕಿರಿ.
105:5b.PSA.105.005 ಆತನು ಮಾಡಿದ ಆಶ್ಚರ್ಯ ಕಾರ್ಯಗಳನ್ನೂ ಆತನ ಅದ್ಭುತಗಳನ್ನೂ ಆತನ ಬಾಯಿಯ ನ್ಯಾಯಗಳನ್ನೂ ಜ್ಞಾಪಕಮಾಡಿ ಕೊಳ್ಳಿರಿ;
105:6b.PSA.105.006 ಆತನ ಸೇವಕನಾದ ಅಬ್ರಹಾಮನ ಸಂತತಿಯೇ, ಆತನು ಆದುಕೊಂಡ ಯಾಕೋಬನ ಮಕ್ಕಳೇ,
105:7b.PSA.105.007 ಆತನೇ ನಮ್ಮ ದೇವರಾದ ಕರ್ತನಾಗಿದ್ದಾನೆ; ಆತನ ನ್ಯಾಯಗಳು ಸಮಸ್ತ ಭೂಮಿಯಲ್ಲಿ ಅವೆ.
105:8b.PSA.105.008 ತನ್ನ ಒಡಂಬಡಿಕೆಯನ್ನೂ ಸಾವಿರ ತಲಾಂತರಗ ಳಿಗೆ ಆಜ್ಞಾಪಿಸಿದ ತನ್ನ ಮಾತನ್ನೂ
105:9b.PSA.105.009 ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನೂ ಇಸಾಕನಿಗೆ ಇಟ್ಟ ಆಣೆಯನ್ನೂ ಆತನು ಯುಗಯುಗಕ್ಕೂ ಜ್ಞಾಪಕ ಮಾಡಿಕೊಂಡಿದ್ದಾನೆ.
105:10b.PSA.105.010 ಅದನ್ನು ಯಾಕೋಬನಿಗೆ ದೃಢ ಮಾಡಿದನು ಮತ್ತು ಇಸ್ರಾಯೇಲಗೆ ನಿತ್ಯ ಒಡಂಬಡಿಕೆ ಯಾಗಿ ಸ್ಥಾಪಿಸಿ ಹೇಳಿದ್ದೇನಂದರೆ--
105:11b.PSA.105.011 ನಿನಗೆ ಕಾನಾನ್ ದೇಶವನ್ನು ನಿಮ್ಮ ಬಾಧ್ಯತೆಯ ಪಾಲಾಗಿ ಕೊಡುವೆನು.
105:12b.PSA.105.012 ಆಗ ಅವರು ಲೆಕ್ಕಕ್ಕೆ ಸ್ವಲ್ಪವಾಗಿಯೂ ಹೌದು, ಬಹಳ ಸ್ವಲ್ಪ ಮಂದಿಯಾಗಿಯೂ ಪರದೇಶಸ್ಥರಾ ಗಿಯೂ ಅದರಲ್ಲಿ ಇದ್ದರು.
105:13b.PSA.105.013 ಅವರು ಜನಾಂಗದಿಂದ ಜನಾಂಗಕ್ಕೂ ಒಂದು ರಾಜ್ಯದಿಂದ ಬೇರೊಂದು ರಾಜ್ಯಕ್ಕೂ ಹೋದರು.
105:14b.PSA.105.014 ಮನುಷ್ಯರು ಅವರಿಗೆ ಕೇಡು ಮಾಡದಂತೆ ಆತನು ತಡೆದನು; ಹೌದು, ಅವರಿಗೋ ಸ್ಕರ ಆತನು ಅರಸುಗಳನ್ನು ಗದರಿಸಿದನು.
105:15b.PSA.105.015 ನನ್ನ ಅಭಿಷಿಕ್ತರನ್ನು ಮುಟ್ಟಬೇಡಿರಿ, ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿರಿ ಎಂದು ಹೇಳಿದನು.
105:16b.PSA.105.016 ದೇಶದ ಮೇಲೆ ಬರವನ್ನು ಬರಮಾಡಿ ಆಹಾರ ವೆಂಬ ಊರುಕೋಲನ್ನು ಮುರಿದನು.
105:17b.PSA.105.017 ಅವರ ಮುಂದೆ ಒಬ್ಬ ಮನುಷ್ಯನನ್ನು ಅಂದರೆ ದಾಸನಾಗಿ ಮಾರಲ್ಪಟ್ಟ ಯೋಸೇಫನನ್ನು ಕಳುಹಿಸಿದನು.
105:18b.PSA.105.018 ಅವರು ಸಂಕೋಲೆಗಳಿಂದ ಅವನ ಕಾಲುಗಳನ್ನು ಬಾಧಿಸಿದರು; ಅವನನ್ನು ಕಬ್ಬಿಣದ ಬೇಡಿಗಳಲ್ಲಿ ಬಂಧಿಸಿದರು.
105:19b.PSA.105.019 ಆತನ ವಾಕ್ಯವು ಬರುವ ವರೆಗೆ ಕರ್ತನ ಮಾತು ಅವನನ್ನು ಪುಟಕ್ಕೆ ಹಾಕಿತು.
105:20b.PSA.105.020 ಅರಸನು ಕಳುಹಿಸಿ ಅವನನ್ನು ಬಿಡಿಸಿದನು; ಜನಗಳ ಅಧಿಪತಿಯು ಅವನನ್ನು ಬಿಡುಗಡೆ ಮಾಡಿದನು.
105:21b.PSA.105.021 ಅವನನ್ನು ತನ್ನ ಮನೆಗೆ ಯಜಮಾನನಾಗಿಯೂ ತನ್ನ ಎಲ್ಲಾ ಆಸ್ತಿಯ ಮೇಲೆ ಅಧಿಪತಿಯಾಗಿಯೂ
105:22b.PSA.105.022 ತನ್ನ ಪ್ರಧಾನರನ್ನು ಮನಸ್ಸು ಬಂದ ಹಾಗೆ ಕಟ್ಟುವದಕ್ಕೂ ತನ್ನ ಜ್ಞಾನ ವನ್ನು ಆಲೋಚನಾ ಕರ್ತರಿಗೆ ಕಲಿಸುವದಕ್ಕೂ ಇಟ್ಟನು.
105:23b.PSA.105.023 ಆಗ ಇಸ್ರಾಯೇಲನು ಐಗುಪ್ತಕ್ಕೆ ಬಂದನು; ಯಾಕೋಬನು ಹಾಮನ ದೇಶದಲ್ಲಿ ಪರದೇಶಸ್ಥನಾಗಿದ್ದನು.
105:24b.PSA.105.024 ಆತನು ತನ್ನ ಜನರನ್ನು ಬಹಳ ಅಭಿವೃದ್ಧಿಮಾಡಿ ಅವರ ವೈರಿಗಳಿಗಿಂತ ಬಲಿಷ್ಠ ರನ್ನಾಗಿ ಮಾಡಿದನು.
105:25b.PSA.105.025 ಆತನು ಆ ದೇಶದವರ ಹೃದಯವನ್ನು ಮಾರ್ಪ ಡಿಸಿದ್ದರಿಂದ ಅವರು ಆತನ ಜನರನ್ನು ದ್ವೇಷಿಸಿ ಆತನ ಸೇವಕರನ್ನು ಕುಯುಕ್ತಿಯಿಂದ ನಡಿಸಿದರು.
105:26b.PSA.105.026 ತನ್ನ ಸೇವಕನಾದ ಮೋಶೆಯನ್ನೂ ತಾನು ಆದು ಕೊಂಡ ಆರೋನನನ್ನೂ ಕಳುಹಿಸಿದನು.
105:27b.PSA.105.027 ಇವರು ಆತನ ಗುರುತುಗಳನ್ನೂ ಹಾಮನ ದೇಶದಲ್ಲಿ ಅದ್ಭುತಗಳನ್ನೂ ಅವರೊಳಗೆ ತೋರಿಸಿದರು.
105:28b.PSA.105.028 ಆತನು ಕತ್ತಲನ್ನು ಕಳುಹಿಸಿ ಅದನ್ನು ಕತ್ತಲಾಗ ಮಾಡಿದನು; ಆಗ ಆತನ ಮಾತಿಗೆ ಅವರು ಎದು ರಾಡಲಿಲ್ಲ.
105:29b.PSA.105.029 ಅವರ ನೀರನ್ನು ರಕ್ತವಾಗಿ ಮಾರ್ಪ ಡಿಸಿ; ವಿಾನುಗಳನ್ನು ಸಾಯಿಸಿದನು.
105:30b.PSA.105.030 ಅವರ ದೇಶದಲೆಲ್ಲಾ ಬಹಳವಾಗಿ ಕಪ್ಪೆಗಳು ತುಂಬಿ ಕೊಂಡವು. ಅರಸುಗಳ ಕೊಠಡಿಗಳಲ್ಲಿ ಸಹ ಬಂದವು.
105:31b.PSA.105.031 ಆತನು ಹೇಳಲು ನೊಣದ ಗುಂಪುಗಳೂ ಅವರ ಮೇರೆಗಳಲ್ಲೆಲ್ಲಾ ಹೇನುಗಳೂ ಬಂದವು.
105:32b.PSA.105.032 ಅವರ ಮಳೆಗಾಗಿ ಕಲ್ಮಳೆಯನ್ನೂ ಅಗ್ನಿಜ್ವಾಲೆಗಳನ್ನೂ ದೇಶದಲ್ಲಿ ಬರಮಾಡಿದನು.
105:33b.PSA.105.033 ಅವರ ದ್ರಾಕ್ಷೇ ಬಳ್ಳಿಯನ್ನೂ ಅಂಜೂರದ ಗಿಡಗಳನ್ನೂ ಹೊಡೆದು ಮೇರೆಗಳ ಮರ ಗಳನ್ನು ಮುರಿದನು.
105:34b.PSA.105.034 ಆತನು ಹೇಳಲು ಮಿಡಿತೆಗಳೂ ಲೆಕ್ಕವಿಲ್ಲದ ಕಂಬಳಿ ಹುಳಗಳೂ ಬಂದವು,
105:35b.PSA.105.035 ಅವು ಅವರ ದೇಶದಲ್ಲಿ ಎಲ್ಲಾ ಪಲ್ಯಗಳನ್ನು ನುಂಗಿಬಿಟ್ಟು; ಭೂಮಿಯ ಫಲಗಳನ್ನು ತಿಂದುಬಿಟ್ಟವು.
105:36b.PSA.105.036 ಅವರ ದೇಶದಲ್ಲಿಯ ಎಲ್ಲಾ ಚೊಚ್ಚಲುಗಳನ್ನೂ ಬಲವುಳ್ಳ ಎಲ್ಲಾ ಪ್ರಮುಖರನ್ನೂ ಹೊಡೆದನು.
105:37b.PSA.105.037 ಆತನು ಬೆಳ್ಳಿ ಬಂಗಾರಗಳ ಸಂಗಡ ಅವರನ್ನು ಹೊರಗೆ ಬರಮಾಡಿ ದನು; ಅವರ ಗೋತ್ರಗಳಲ್ಲಿ ಬಲಹೀನನು ಒಬ್ಬನೂ ಇರಲಿಲ್ಲ.
105:38b.PSA.105.038 ಐಗುಪ್ತ್ಯರು ಅವರ ವಿಷಯದಲ್ಲಿ ಹೆದರಿಕೆ ಯುಳ್ಳವರಾದ್ದರಿಂದ ಅವರು ಹೊರಟು ಹೋದದಕ್ಕೆ ಸಂತೋಷಿಸಿದರು.
105:39b.PSA.105.039 ಆತನು ನೆರಳಿಗಾಗಿ ಮೇಘ ವನ್ನೂ ರಾತ್ರಿಯಲ್ಲಿ ಬೆಳಕಿಗೋಸ್ಕರ ಬೆಂಕಿಯನ್ನೂ ವಿಸ್ತರಿಸಿದನು.
105:40b.PSA.105.040 ಅವರು ಕೇಳಿದಾಗ ಲಾವಕ್ಕಿಗಳನ್ನು ಬರಮಾಡಿ, ಪರಲೋಕದ ರೊಟ್ಟಿಯಿಂದ ಅವರನ್ನು ತೃಪ್ತಿಪಡಿಸಿದನು.
105:41b.PSA.105.041 ಆತನು ಬಂಡೆಯನ್ನು ತೆರೆಯಲು ನೀರು ಹೊರಟಿತು; ಅದು ಒಣಗಿದ ಸ್ಥಳಗಳಲ್ಲಿ ನದಿಯಾಗಿ ಹರಿಯಿತು.
105:42b.PSA.105.042 ಆತನು ತನ್ನ ಪರಿಶುದ್ಧ ವಾಗ್ದಾನವನ್ನೂ ಸೇವಕನಾದ ಅಬ್ರಹಾಮನನ್ನೂ ಜ್ಞಾಪಕ ಮಾಡಿಕೊಂಡನು.
105:43b.PSA.105.043 ಆತನು ತನ್ನ ಜನರನ್ನು ಆನಂದದಿಂದಲೂ ತಾನು ಆದುಕೊಂಡವರನ್ನು ಉತ್ಸಾ ಹದಿಂದಲೂ ಹೊರಗೆ ಬರಮಾಡಿದನು,
105:44b.PSA.105.044 ಅವರು ಪ್ರಜೆಗಳ ಕಷ್ಟಾರ್ಜಿತವನ್ನು ಸ್ವಾಧೀನಮಾಡಿಕೊಂಡರು.ಆತನ ನಿಯಮಗಳನ್ನು ಕೈಕೊಂಡು ನ್ಯಾಯಪ್ರಮಾಣ ಗಳನ್ನೂ ಕಾಪಾಡುವದಕ್ಕಾಗಿ ಆತನು ಅನ್ಯಜನಾಂಗದ ದೇಶಗಳನ್ನು ಅವರಿಗೆ ಕೊಟ್ಟನು. ಕರ್ತನನ್ನು ಸ್ತುತಿಸಿರಿ.
105:45b.PSA.105.045 ಆತನ ನಿಯಮಗಳನ್ನು ಕೈಕೊಂಡು ನ್ಯಾಯಪ್ರಮಾಣ ಗಳನ್ನೂ ಕಾಪಾಡುವದಕ್ಕಾಗಿ ಆತನು ಅನ್ಯಜನಾಂಗದ ದೇಶಗಳನ್ನು ಅವರಿಗೆ ಕೊಟ್ಟನು. ಕರ್ತನನ್ನು ಸ್ತುತಿಸಿರಿ.
106
106:1b.PSA.106.001 ನೀವು ಕರ್ತನನ್ನು ಸ್ತುತಿಸಿರಿ, ಕರ್ತನಿಗೆ ಉಪಕಾರ ಸ್ತುತಿಮಾಡಿರಿ; ಆತನು ಒಳ್ಳೆಯವನು, ಆತನ ಕರುಣೆಯು ಶಾಶ್ವತ ವಾಗಿರುವದು.
106:2b.PSA.106.002 ಕರ್ತನ ಪರಾಕ್ರಮ ಕ್ರಿಯೆಗಳನ್ನು ಪ್ರಕಟಿಸುವವನಾರು? ಆತನ ಸ್ತೋತ್ರಗಳನ್ನು ಪ್ರಸಿದ್ಧಿ ಪಡಿಸುವವನಾರು?
106:3b.PSA.106.003 ನ್ಯಾಯವನ್ನು ಕೈಕೊಂಡು ಎಲ್ಲಾ ಕಾಲದಲ್ಲಿ ನೀತಿಯನ್ನು ಮಾಡುವವರು ಧನ್ಯರು.
106:4b.PSA.106.004 ಓ ಕರ್ತನೇ, ನಿನ್ನ ಜನರ ಮೇಲಿರುವ ಕಟಾಕ್ಷದಿಂದ ನನ್ನನ್ನೂ ಜ್ಞಾಪಿಸಿಕೋ; ನಿನ್ನ ರಕ್ಷಣೆಯಿಂದ ನನ್ನನ್ನು ದರ್ಶಿಸು.
106:5b.PSA.106.005 ಕರ್ತನೇ, ನೀನು ಆದುಕೊಂಡವರ ಸುಖವನ್ನು ನಾನು ನೋಡಿ ನಿನ್ನ ಜನಾಂಗದ ಸಂತೋಷ ದೊಂದಿಗೆ ಸಂತೋಷಿಸಿ ನಿನ್ನ ಬಾಧ್ಯತೆಯ ಸಂಗಡ ಹೊಗಳಿಕೊಳ್ಳುವೆನು.
106:6b.PSA.106.006 ನಮ್ಮ ತಂದೆಗಳ ಸಂಗಡ ನಾವು ಪಾಪಮಾಡಿದ್ದೇವೆ, ಅಕ್ರಮಮಾಡಿದ್ದೇವೆ, ದುಷ್ಟತ್ವವನ್ನು ನಡಿಸಿದ್ದೇವೆ.
106:7b.PSA.106.007 ನಮ್ಮ ತಂದೆಗಳು ಐಗುಪ್ತದಲ್ಲಿ ನಿನ್ನ ಅದ್ಭುತಗಳನ್ನು ತಿಳಿಯದೆ ನಿನ್ನ ಕರುಣಾತಿಶಯವನ್ನು ನೆನಸದೆ, ಸಮುದ್ರದ ಬಳಿಯಲ್ಲಿ, ಅಂದರೆ ಕೆಂಪು ಸಮುದ್ರದ ಹತ್ತಿರ ನಿನಗೆ ತಿರುಗಿ ಬಿದ್ದರು.
106:8b.PSA.106.008 ಆದಾಗ್ಯೂ ಆತನು ತನ್ನ ಮಹಾಶಕ್ತಿಯನ್ನು ಅವರಿಗೆ ತಿಳಿಯ ಮಾಡುವ ಹಾಗೆ ತನ್ನ ಹೆಸರಿನ ನಿಮಿತ್ತ ಅವರನ್ನು ರಕ್ಷಿಸಿದನು.
106:9b.PSA.106.009 ಆತನು ಕೆಂಪು ಸಮುದ್ರವನ್ನು ಗದರಿಸಲು ಅದು ಒಣಗಿ ಹೋಯಿತು. ಹೀಗೆ ಜಲಾಗಾಧದಲ್ಲಿ, ಅರಣ್ಯ ದಲ್ಲಿದ್ದ ಹಾಗೆಯೇ ಆತನು ಅವರನ್ನು ನಡಿಸಿದನು.
106:10b.PSA.106.010 ವೈರಿಯ ಕೈಯೊಳಗಿಂದ ಅವರನ್ನು ರಕ್ಷಿಸಿ, ಶತ್ರು ವಿನ ಕೈಯಿಂದ ಅವರನ್ನು ಬಿಡುಗಡೆ ಮಾಡಿದನು.
106:11b.PSA.106.011 ನೀರುಗಳು ಅವರ ವೈರಿಗಳನ್ನು ಮುಚ್ಚಿಬಿಟ್ಟವು; ಅವರಲ್ಲಿ ಒಬ್ಬನಾದರೂ ಉಳಿಯಲಿಲ್ಲ.
106:12b.PSA.106.012 ಆಗ ಅವರು ಆತನ ಮಾತುಗಳನ್ನು ನಂಬಿ ಆತನ ಸ್ತೋತ್ರ ವನ್ನು ಹಾಡಿದರು.
106:13b.PSA.106.013 ಆತನ ಕೆಲಸಗಳನ್ನು ಬೇಗ ಮರೆತುಬಿಟ್ಟು ಆತನ ಆಲೋಚನೆಗೆ ಅವರು ಕಾದುಕೊಳ್ಳದೆ ಇದ್ದರು.
106:14b.PSA.106.014 ಅರಣ್ಯದಲ್ಲಿ ದುರಾಶೆಯಿಂದ ಆಶಿಸಿ ಮರುಭೂಮಿ ಯಲ್ಲಿ ದೇವರನ್ನು ಪರೀಕ್ಷಿಸಿದರು.
106:15b.PSA.106.015 ಆಗ ಅವರ ಬೇಡಿಕೆಯಂತೆ ಅವರಿಗೆ ಆತನು ಕೊಟ್ಟನು; ಆದರೆ ಅವರ ಪ್ರಾಣದಲ್ಲಿ ಕ್ಷೀಣತೆಯನ್ನು ಕಳುಹಿಸಿದನು.
106:16b.PSA.106.016 ಅವರು ಪಾಳೆಯದಲ್ಲಿ ಮೋಶೆಯ ಮೇಲೆಯೂ ಕರ್ತನ ಪರಿಶುದ್ದನಾದ ಆರೋನನ ಮೇಲೆಯೂ ಹೊಟ್ಟೇಕಿಚ್ಚು ಪಟ್ಟರು.
106:17b.PSA.106.017 ಭೂಮಿಯು ಬಾಯಿತೆರೆದು ದಾತಾನನನ್ನು ನುಂಗಿ ಅಬಿರಾಮನ ಗುಂಪನ್ನು ಮುಚ್ಚಿ ಬಿಟ್ಟಿತು.
106:18b.PSA.106.018 ಬೆಂಕಿಯು ಅವರ ಗುಂಪಿನಲ್ಲಿ ಉರಿದು, ಜ್ವಾಲೆಯು ದುಷ್ಟರನ್ನು ಸುಟ್ಟಿತು.
106:19b.PSA.106.019 ಅವರು ಹೋರೇಬಿ ನಲ್ಲಿ ಕರುವನ್ನು ಮಾಡಿ ಎರಕದ ವಿಗ್ರಹಕ್ಕೆ ಅಡ್ಡ ಬಿದ್ದರು.
106:20b.PSA.106.020 ತಮ್ಮ ಘನವನ್ನು ಹುಲ್ಲು ತಿನ್ನುವ ಎತ್ತಿನ ರೂಪಕ್ಕೆ ಬದಲಾಯಿಸಿದರು.
106:21b.PSA.106.021 ತಮ್ಮ ರಕ್ಷಕನಾಗಿ ಐಗುಪ್ತದೇಶದಲ್ಲಿ ದೊಡ್ಡ ಕೆಲಸಗಳನ್ನೂ
106:22b.PSA.106.022 ಹಾಮನ ದೇಶದಲ್ಲಿ ಅದ್ಭುತಗಳನ್ನೂ ಕೆಂಪು ಸಮುದ್ರದ ಬಳಿ ಯಲ್ಲಿ ಭಯಂಕರವಾದವುಗಳನ್ನೂ ಮಾಡಿದ ದೇವ ರನ್ನು ಅವರು ಮರೆತರು.
106:23b.PSA.106.023 ಆದದರಿಂದ ಆತನು ಅವರನ್ನು ನಾಶಮಾಡುತ್ತೇನೆಂದು ಹೇಳಿದನು. ಆದರೆ ಆತನು ಆದುಕೊಂಡ ಮೋಶೆಯು ಆತನ ಕೋಪ ವನ್ನು ತಿರುಗಿಸುವ ಹಾಗೆ ಆಪತ್ತಿನಲ್ಲಿ ಆತನ ಮುಂದೆ ನಿಂತುಕೊಂಡನು.
106:24b.PSA.106.024 ಹೌದು, ಅವರು, ಮನೋಹರವಾದ ದೇಶ ವನ್ನು ಅಸಹ್ಯಿಸಿಬಿಟ್ಟು ಆತನ ಮಾತನ್ನು ನಂಬದೆ ಹೋದರು.
106:25b.PSA.106.025 ತಮ್ಮ ಗುಡಾರಗಳಲ್ಲಿ ಗುಣುಗುಟ್ಟಿ ಕರ್ತನ ಸ್ವರವನ್ನು ಕೇಳದೆ ಹೋದರು.
106:26b.PSA.106.026 ಆದದರಿಂದ ಅವರನ್ನು ಅರಣ್ಯದಲ್ಲಿ ಕೆಡವುವದಕ್ಕೂ
106:27b.PSA.106.027 ಅವರ ಸಂತತಿಯನ್ನು ಜನಾಂಗಗಳಲ್ಲಿ ಕೆಡವಿ, ಅವರನ್ನು ದೇಶಗಳಲ್ಲಿ ಚದರಿಸುವದಕ್ಕೂ ಆತನು ತನ್ನ ಕೈಯನ್ನು ಅವರ ಮೇಲೆತ್ತಿದನು.
106:28b.PSA.106.028 ಬಾಳ್‌ಪೆಗೊ ಯೋರಿಗೆ ಕೂಡಿಕೊಂಡು ಸತ್ತವರಿಗೆ ಅರ್ಪಿಸಿದ ಬಲಿಗಳನ್ನು ತಿಂದು
106:29b.PSA.106.029 ತಮ್ಮ ಕ್ರಿಯೆಗಳಿಂದ ಆತನಿಗೆ ಕೋಪವನ್ನು ಎಬ್ಬಿಸಿದರು; ಆದದರಿಂದ ವ್ಯಾಧಿಯು ಅವರಲ್ಲಿ ಹೊಕ್ಕಿತು.
106:30b.PSA.106.030 ಆಗ ಫೀನೆಹಾಸನು ನಿಂತು ಕೊಂಡು ನ್ಯಾಯತೀರಿಸಿದ್ದರಿಂದ ವ್ಯಾಧಿಯು ನಿಂತು ಹೋಯಿತು.
106:31b.PSA.106.031 ಇದು ತಲತಲಾಂತರಕ್ಕೂ ಯುಗ ಯುಗಕ್ಕೂ ಆತನಿಗೆ ನೀತಿಯೆಂದು ಎಣಿಸಲ್ಪಟ್ಟಿತು.
106:32b.PSA.106.032 ಅವರು ವಿವಾದದ ನೀರಿನ ಬಳಿಯಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು; ಅವರ ನಿಮಿತ್ತ ಮೋಶೆಗೆ ಕೇಡು ಬಂತು.
106:33b.PSA.106.033 ಅವರು ದೇವರಾತ್ಮನನ್ನು ಕೆಣ ಕಿದರು; ಆದದರಿಂದ ಅವನು ಬುದ್ಧಿಹೀನತೆಯಿಂದ ಮಾತನಾಡಿದನು.
106:34b.PSA.106.034 ಕರ್ತನು ಅವರಿಗೆ ಹೇಳಿದ ಜನಗಳನ್ನು ಅವರು ನಾಶಮಾಡದೆ ಹೋದರು.
106:35b.PSA.106.035 ಆದರೆ ಅನ್ಯಜನಾಂಗ ಗಳ ಸಂಗಡ ಕೂಡಿಕೊಂಡು; ಅವರ ಕೆಲಸಗಳನ್ನು ಕಲಿತುಕೊಂಡರು.
106:36b.PSA.106.036 ಅವರ ವಿಗ್ರಹಗಳಿಗೆ ಸೇವೆ ಮಾಡಿದರು ಅವು ಅವರಿಗೆ ನೇಣು ಆದವು.
106:37b.PSA.106.037 ತಮ್ಮ ಗಂಡು ಹೆಣ್ಣು ಮಕ್ಕಳನ್ನೂ ದೆವ್ವಗಳಿಗೆ ಅರ್ಪಿಸಿದರು.
106:38b.PSA.106.038 ಇದಲ್ಲದೆ ತಮ್ಮ ಗಂಡು ಹೆಣ್ಣು ಮಕ್ಕಳ ನಿರಪರಾ ಧದ ರಕ್ತವನ್ನು ಚೆಲ್ಲಿ, ಕಾನಾನಿನ ವಿಗ್ರಹಗಳಿಗೆ ಅರ್ಪಿಸಿ; ದೇಶವನ್ನು ರಕ್ತದಿಂದ ಅಶುದ್ಧಮಾಡಿದರು.
106:39b.PSA.106.039 ಹೀಗೆ ತಮ್ಮ ಕೆಲಸಗಳಿಂದ ತಮ್ಮನ್ನು ಹೊಲೆಮಾಡಿಕೊಂಡು, ತಮ್ಮ ಕ್ರಿಯೆಗಳಿಂದ ಜಾರರಾದರು.
106:40b.PSA.106.040 ಆಗ ಕರ್ತನ ಕೋಪವು ಆತನ ಜನರಿಗೆ ವಿರೋಧವಾಗಿ ಉರಿ ಯಿತು; ಆತನು ತನ್ನ ಸ್ವಂತ ಬಾಧ್ಯತೆಯನ್ನು ಅಸಹ್ಯಿಸಿ ಕೊಂಡು
106:41b.PSA.106.041 ಅವರನ್ನು ಅನ್ಯಜನಾಂಗಗಳ ಕೈಗೆಕೊಟ್ಟನು; ಅವರ ಹಗೆಯವರು ಅವರನ್ನು ಆಳಿದರು.
106:42b.PSA.106.042 ಅವರ ಶತ್ರುಗಳು ಅವರನ್ನು ಬಾಧೆಪಡಿಸಿದರು; ಅವರ ಕೈಕೆಳಗೆ ಅಧೀನರಾದರು.
106:43b.PSA.106.043 ಬಹಳ ಸಾರಿ ಆತನು ಅವರನ್ನು ಬಿಡಿಸಿದನು; ಆದರೆ ಅವರು ತಮ್ಮ ಆಲೋಚನೆಯಿಂದ ಆತನಿಗೆ ಕೋಪವನ್ನೆಬ್ಬಿಸಿದರು. ತಮ್ಮ ಅಕ್ರಮದಿಂದ ಅವರು ಕುಗ್ಗಿಹೋದರು.
106:44b.PSA.106.044 ಆದಾಗ್ಯೂ ಅವರ ಕೂಗನ್ನು ಆತನು ಕೇಳಿದಾಗ ಅವರ ಇಕ್ಕಟ್ಟಿನ ಮೇಲೆ ಲಕ್ಷ್ಯವಿಟ್ಟು
106:45b.PSA.106.045 ಅವರಿಗಾಗಿ ತನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು ತನ್ನ ಅತಿಶಯವಾದ ಕರು ಣೆಯ ಪ್ರಕಾರ ಪಶ್ಚಾತ್ತಾಪಪಟ್ಟನು.
106:46b.PSA.106.046 ಅವರನ್ನು ಸೆರೆಹಿಡಿದವರ ಮುಂದೆ ಅವರು ಕರುಣೆ ಹೊಂದುವಂತೆ ಮಾಡಿದನು.
106:47b.PSA.106.047 ಓ ನಮ್ಮ ದೇವರಾದ ಕರ್ತನೇ, ನಾವು ನಿನ್ನ ಪರಿಶುದ್ಧ ಹೆಸರಿಗೆ ಉಪಕಾರಸ್ತುತಿ ಮಾಡಿ ನಿನ್ನ ಸ್ತೋತ್ರದಲ್ಲಿ ಜಯಘೋಷ ಮಾಡುವ ಹಾಗೆ ನಮ್ಮನ್ನು ರಕ್ಷಿಸು. ಅನ್ಯಜನಾಂಗಗಳೊಳಗಿಂದ ನಮ್ಮನ್ನು ಹೊರಗೆ ಬರಮಾಡು.ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಾಂತರಕ್ಕೂ ಸ್ತುತಿಯುಂಟಾಗಲಿ. ಜನರೆಲ್ಲಾ ಆಮೆನ್ ಎಂದು ಹೇಳಲಿ. ನೀವು ಕರ್ತನನ್ನು ಸ್ತುತಿಸಿರಿ.
106:48b.PSA.106.048 ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಾಂತರಕ್ಕೂ ಸ್ತುತಿಯುಂಟಾಗಲಿ. ಜನರೆಲ್ಲಾ ಆಮೆನ್ ಎಂದು ಹೇಳಲಿ. ನೀವು ಕರ್ತನನ್ನು ಸ್ತುತಿಸಿರಿ.
107
107:1b.PSA.107.001 ಕರ್ತನನ್ನು ಕೊಂಡಾಡಿರಿ; ಆತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಇರುವದು.
107:2b.PSA.107.002 ಕರ್ತನು ವಿಮೋಚಿಸಿ ದವರು ಹಾಗೆಯೇ ಹೇಳಲಿ; ಆತನು ವೈರಿಯ ಕೈಯಿಂದ ಬಿಡುಗಡೆ ಮಾಡಿ,
107:3b.PSA.107.003 ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ದೇಶಗಳಿಂದ ಕೂಡಿಸಿದವರು ಹಾಗೆ ಹೇಳಲಿ.
107:4b.PSA.107.004 ಅರಣ್ಯದಲ್ಲಿಯೂ ಹಾದಿ ಇಲ್ಲದ ಕಾಡಿನಲ್ಲಿಯೂ ಅಲೆದು ವಾಸಿಸುವದಕ್ಕೆ ಪಟ್ಟಣವನ್ನು ಕಂಡುಕೊಳ್ಳದೆ,
107:5b.PSA.107.005 ಹಸಿದು, ದಾಹಗೊಂಡು ಅವರ ಪ್ರಾಣವು ಅವರಲ್ಲಿ ಕುಗ್ಗಿಹೋಯಿತು.
107:6b.PSA.107.006 ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳಗಿಂದ ಅವರನ್ನು ಬಿಡಿಸಿ,
107:7b.PSA.107.007 ವಾಸಿಸುವ ಪಟ್ಟಣಕ್ಕೆ ಹೋಗುವ ಹಾಗೆ ಅವರನ್ನು ಸರಿಯಾದ ಹಾದಿಯಲ್ಲಿ ನಡಿಸಿದನು.
107:8b.PSA.107.008 ಅವರು ಕರ್ತನನ್ನು ಆತನ ಒಳ್ಳೇತನಕ್ಕೋಸ್ಕರವೂ ಮನುಷ್ಯನ ಮಕ್ಕಳಿಗೆ ಆತನು ಮಾಡುವ ಅದ್ಭುತ ಗಳಿಗೋಸ್ಕರವೂ ಕೊಂಡಾಡಲಿ.
107:9b.PSA.107.009 ದಾಹಪಟ್ಟ ಪ್ರಾಣ ವನ್ನು ತೃಪ್ತಿಪಡಿಸಿ ಹಸಿದ ಪ್ರಾಣವನ್ನು ಒಳ್ಳೇದರಿಂದ ತುಂಬಿಸಿದ್ದಾನೆ.
107:10b.PSA.107.010 ಕತ್ತಲಲ್ಲಿ ಮತ್ತು ಮರಣದ ನೆರಳಿ ನಲ್ಲಿ ಕೂತವರೂ ದೀನತೆಯಲ್ಲಿಯೂ ಕಬ್ಬಿಣದ ಬೇಡಿ ಯಲ್ಲಿ ಬಂಧಿತರೂ ಸೆರೆಬಿದ್ದವರೂ ಆದ ಇವರು
107:11b.PSA.107.011 ದೇವರ ಮಾತುಗಳನ್ನು ಎದುರಿಸಿ, ಮಹೋನ್ನತನ ಆಲೋಚನೆಯನ್ನು ಅಸಹ್ಯಿಸಿದ್ದರಿಂದ
107:12b.PSA.107.012 ಆತನು ಅವರ ಹೃದಯವನ್ನು ಕಷ್ಟದಿಂದ ತಗ್ಗಿಸಿದಾಗ ಸಹಾಯಕ ನಿಲ್ಲದೆ ಕೆಳಗೆ ಬಿದ್ದರು.
107:13b.PSA.107.013 ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳ ಗಿಂದ ಅವರನ್ನು ರಕ್ಷಿಸಿ
107:14b.PSA.107.014 ಕತ್ತಲೆಯೊಳಗಿಂದಲೂ ಮರಣದ ನೆರಳಿನಿಂದಲೂ ಅವರನ್ನು ಹೊರಗೆ ತಂದು ಅವರ ಬಂಧನಗಳನ್ನು ಮುರಿದುಬಿಟ್ಟನು.
107:15b.PSA.107.015 ಅವರು ಕರ್ತನನ್ನು ಆತನ ಒಳ್ಳೇತನಕ್ಕೋಸ್ಕರವೂ ಆತನು ಮನುಷ್ಯನ ಮಕ್ಕಳಿಗೆ ಮಾಡುವ ಅದ್ಭುತಗಳಿಗೋ ಸ್ಕರವೂ ಕೊಂಡಾಡಲಿ.
107:16b.PSA.107.016 ಆತನು ಹಿತ್ತಾಳೆಯ ಕದ ಗಳನ್ನು ಮುರಿದು ಕಬ್ಬಿಣದ ಅಗುಳಿಗಳನ್ನು ಕಡಿದು ಬಿಟ್ಟಿದ್ದಾನೆ.
107:17b.PSA.107.017 ಮೂಢರು ತಮ್ಮ ದ್ರೋಹದಿಂದಲೂ ಅಕ್ರಮಗಳಿಂದಲೂ ಶ್ರಮೆಪಡುತ್ತಾರೆ.
107:18b.PSA.107.018 ಅವರ ಪ್ರಾಣವು ಎಲ್ಲಾ ಆಹಾರವನ್ನು ಅಸಹ್ಯಿಸುತ್ತದೆ; ಅವರು ಮರಣದ ಬಾಗಲುಗಳಿಗೆ ಸವಿಾಪಿಸುತ್ತಾರೆ.
107:19b.PSA.107.019 ಆಗ ಅವರು ತಮ್ಮ ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಲು ಆತನು ಅವರನ್ನು ಅವರ ಸಂಕಟಗಳೊಳಗಿಂದ ರಕ್ಷಿಸುತ್ತಾನೆ.
107:20b.PSA.107.020 ಆತನು ತನ್ನ ವಾಕ್ಯವನ್ನು ಕಳುಹಿಸಿ ಅವರನ್ನು ಸ್ವಸ್ಥಮಾಡಿ ಅವರ ನಾಶನಗಳಿಂದ ಅವರನ್ನು ತಪ್ಪಿಸಿ ದನು.
107:21b.PSA.107.021 ಅವರು ಕರ್ತನನ್ನು ಆತನ ಒಳ್ಳೆಯತನ ಕ್ಕೋಸ್ಕರವೂ ಆತನು ಮನುಷ್ಯನ ಮಕ್ಕಳಿಗೆ ಮಾಡುವ ಅದ್ಭುತಗಳಿಗೋಸ್ಕರವೂ ಕೊಂಡಾಡಲಿ.
107:22b.PSA.107.022 ಸ್ತೋತ್ರದ ಬಲಿಗಳನ್ನು ಅರ್ಪಿಸಿ ಆತನ ಕೆಲಸಗಳನ್ನು ಉತ್ಸಾಹ ದಿಂದ ಸಾರಲಿ.
107:23b.PSA.107.023 ಹಡಗುಗಳಲ್ಲಿ ಸಮುದ್ರಕ್ಕೆ ಇಳಿದು ಹೋಗಿ ಬಹಳ ನೀರುಗಳಲ್ಲಿ ವ್ಯಾಪಾರಮಾಡುವವರು
107:24b.PSA.107.024 ಕರ್ತನ ಕೆಲಸಗಳನ್ನೂ ಅಗಾಧಗಳಲ್ಲಿ ಆತನ ಅದ್ಭುತಗಳನ್ನೂ ನೋಡುತ್ತಾರೆ.
107:25b.PSA.107.025 ಆತನು ಆಜ್ಞಾಪಿಸಿ ಬಿರುಗಾಳಿಯನ್ನು ಏಳಮಾಡುತ್ತಾನೆ; ಅದು ಅದರ ತೆರೆಗಳನ್ನು ಎಬ್ಬಿಸುತ್ತದೆ.
107:26b.PSA.107.026 ಅವರು ಆಕಾಶಕ್ಕೆ ಏರು ತ್ತಾರೆ; ತಿರುಗಿ ಅಗಾಧಗಳಿಗೆ ಇಳಿಯುತ್ತಾರೆ; ಅವರ ಪ್ರಾಣವು ಕಳವಳದಿಂದ ಕರಗಿಹೋಗುತ್ತದೆ.
107:27b.PSA.107.027 ಅವರು ಅತ್ತಿತ್ತ ತೂಗಾಡಿ ಮತ್ತನ ಹಾಗೆ ಓಲಾ ಡುತ್ತಾರೆ. ಅವರ ಜ್ಞಾನವೆಲ್ಲಾ ನುಂಗಿ ಹೋಯಿತು.
107:28b.PSA.107.028 ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳಗಿಂದ ಅವರನ್ನು ಹೊರಗೆ ಬರಮಾಡಿ
107:29b.PSA.107.029 ಬಿರುಗಾಳಿಯನ್ನು ಶಾಂತಮಾಡುತ್ತಾನೆ; ಹೀಗೆ ಅದರ ತೆರೆಗಳು ನಿಂತು ಹೋಗುವವು.
107:30b.PSA.107.030 ಅವು ಶಾಂತವಾದಾಗ ಅವರು ಸಂತೋಷಪಡುತ್ತಾರೆ; ಹೀಗೆ ಅವರು ಅಪೇಕ್ಷಿಸಿದ ರೇವಿಗೆ ಅವರನ್ನು ನಡೆಸುತ್ತಾನೆ.
107:31b.PSA.107.031 ಅವರು ಕರ್ತನನ್ನು ಆತನ ಒಳ್ಳೇತನಕ್ಕೋಸ್ಕರವೂ ಆತನು ಮನುಷ್ಯನ ಮಕ್ಕಳಿಗೆ ಮಾಡುವ ಅದ್ಭುತಗಳಿ ಗೋಸ್ಕರವೂ ಕೊಂಡಾಡಲಿ.
107:32b.PSA.107.032 ಜನರು ಸಭೆಯಲ್ಲಿ ಆತನನ್ನು ಘನಪಡಿಸಿ ಹಿರಿಯರ ಸಭೆಯಲ್ಲಿ ಆತನನ್ನು ಸ್ತುತಿಸಲಿ.
107:33b.PSA.107.033 ಆತನು ನದಿಗಳನ್ನು ಅರಣ್ಯವಾಗಿಯೂ ನೀರಿನ ಬುಗ್ಗೆಗಳನ್ನು ಒಣ ಭೂಮಿಯಾಗಿಯೂ
107:34b.PSA.107.034 ಫಲ ವುಳ್ಳ ಭೂಮಿಯನ್ನು ಬಂಜರಾಗಿಯೂ ಅದರ ನಿವಾಸಿ ಗಳ ಕೆಟ್ಟತನಕ್ಕೋಸ್ಕರ ಮಾರ್ಪಡಿಸುತ್ತಾನೆ.
107:35b.PSA.107.035 ಆತನು ಅರಣ್ಯವನ್ನು ನೀರಿನ ಕೆರೆಯಾಗಿಯೂ ಒಣ ಭೂಮಿ ಯನ್ನು ನೀರಿನ ಬುಗ್ಗೆಗಳಾಗಿಯೂ ಮಾರ್ಪಡಿಸುತ್ತಾನೆ.
107:36b.PSA.107.036 ಅಲ್ಲಿ ಹಸಿದವರನ್ನು ವಾಸಿಸಮಾಡುತ್ತಾನೆ; ಆಗ ಅವರು ವಾಸಿಸುವ ಪಟ್ಟಣವನ್ನು ಸ್ಥಾಪಿಸಿ,
107:37b.PSA.107.037 ಹೊಲ ಗಳನ್ನು ಬಿತ್ತಿ, ದ್ರಾಕ್ಷಾಲತೆಗಳನ್ನು ನೆಡುವರು; ಅವು ಹುಟ್ಟುವಳಿಯ ಫಲವನ್ನು ಕೊಡುವವು.
107:38b.PSA.107.038 ಆತನು ಅವರನ್ನು ಆಶೀರ್ವದಿಸಿದ್ದರಿಂದ ಅವರು ಬಹಳವಾಗಿ ಹೆಚ್ಚುತ್ತಾರೆ; ಅವರ ದನಗಳನ್ನು ಸಹ ಆತನು ಕಡಿಮೆ ಮಾಡುವದಿಲ್ಲ.
107:39b.PSA.107.039 ತಿರಿಗಿ ಅವರು ಕಡಿಮೆಯಾಗಿ ಕೇಡು ಚಿಂತೆಗಳ ಸಂಕಟದಿಂದ ಕುಗ್ಗುತ್ತಾರೆ.
107:40b.PSA.107.040 ಆತನು ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯಿದು ಅವ ರನ್ನು ದಾರಿ ಇಲ್ಲದ ಕಾಡಿನಲ್ಲಿ ಅಲೆಯ ಮಾಡುತ್ತಾನೆ.
107:41b.PSA.107.041 ಆದಾಗ್ಯೂ ಆತನು ಬಡವನನ್ನು ಸಂಕಟದಿಂದ ಉನ್ನತಕ್ಕೇರಿಸಿ ಅವನ ಕುಟುಂಬಗಳನ್ನು ಮಂದೆಯ ಹಾಗೆ ಇರಿಸುತ್ತಾನೆ.
107:42b.PSA.107.042 ನೀತಿವಂತರು ನೋಡಿ ಸಂತೋ ಷಪಡುವರು; ಆದರೆ ಎಲ್ಲಾ ಅಕ್ರಮಗಾರರು ಬಾಯಿ ಮುಚ್ಚಿಕೊಳ್ಳುವರು.ಜ್ಞಾನಿಯು ಯಾವನೋ, ಅವನು ಇವುಗಳನ್ನು ಗಮನಿಸುವನು; ಅವರು ಕರ್ತನ ಪ್ರೀತಿ ಕರುಣೆಯನ್ನು ಗ್ರಹಿಸಿಕೊಳ್ಳುವರು.
107:43b.PSA.107.043 ಜ್ಞಾನಿಯು ಯಾವನೋ, ಅವನು ಇವುಗಳನ್ನು ಗಮನಿಸುವನು; ಅವರು ಕರ್ತನ ಪ್ರೀತಿ ಕರುಣೆಯನ್ನು ಗ್ರಹಿಸಿಕೊಳ್ಳುವರು.
108
108:1b.PSA.108.001 ಓ ದೇವರೇ, ನನ್ನ ಹೃದಯವು ಸಿದ್ಧವಾಗಿದೆ; ನಾನು ನನ್ನ ಹೆಚ್ಚಳ ದೊಂದಿಗೆ ಹಾಡಿ ಕೀರ್ತಿಸುವೆನು.
108:2b.PSA.108.002 ವೀಣೆಯೇ, ಕಿನ್ನರಿಯೇ, ಎಚ್ಚರವಾಗು; ನಾನು ಉದಯದಲ್ಲಿ ಎಚ್ಚರಗೊಳ್ಳುವೆನು.
108:3b.PSA.108.003 ಕರ್ತನೇ, ಜನರಲ್ಲಿ ನಿನ್ನನ್ನು ಕೊಂಡಾಡುವೆನು; ಜನಾಂಗಗಳಲ್ಲಿ ನಿನ್ನನ್ನು ಕೀರ್ತಿಸು ವೆನು.
108:4b.PSA.108.004 ಆಕಾಶಕ್ಕಿಂತ ನಿನ್ನ ಕರುಣೆಯೂ ಮೇಘಗಳನ್ನು ನಿಲುಕುವಂಥ ನಿನ್ನ ಸತ್ಯವೂ ದೊಡ್ಡದು.
108:5b.PSA.108.005 ದೇವರೇ, ಆಕಾಶಗಳ ಮೇಲೆ ನೀನು ಘನಹೊಂದು; ಭೂಮಿಯ ಮೇಲೆ ನಿನ್ನ ಮಹಿಮೆಯು ಇರಲಿ.
108:6b.PSA.108.006 ನಿನ್ನ ಪ್ರಿಯರು ಬಿಡುಗಡೆಯಾಗುವ ಹಾಗೆ ನಿನ್ನ ಬಲಗೈಯಿಂದ ರಕ್ಷಿಸಿ ನನಗೆ ಉತ್ತರ ಕೊಡು.
108:7b.PSA.108.007 ದೇವರು ತನ್ನ ಪರಿಶುದ್ಧತ್ವದಲ್ಲಿ ನುಡಿದಿದ್ದಾನೆ; ನಾನು ಉತ್ಸಾಹ ಪಡುವೆನು. ಶೆಕೆಮನ್ನು ಹಂಚುವೆನು, ಸುಕ್ಕೋತಿನ ತಗ್ಗನ್ನು ಅಳತೆ ಮಾಡುವೆನು.
108:8b.PSA.108.008 ಗಿಲ್ಯಾದ್ ನನ್ನದು; ಮನಸ್ಸೆ ನನ್ನದು; ಎಫ್ರಾಯಾಮ್ ನನ್ನ ತಲೆಯ ಬಲಸ್ಥಾನವು; ಯೆಹೂದವು ನನ್ನ ರಾಜ ದಂಡವಾಗಿದೆ
108:9b.PSA.108.009 ಮೋವಾಬ್ ನನ್ನನ್ನು ತೊಳೆಯುವ ಪಾತ್ರೆಯು; ಏದೋಮಿನ ಮೇಲೆ ನನ್ನ ಕೆರವನ್ನು ಎಸೆಯುವೆನು; ಫಿಲಿಷ್ಟಿಯದ ಮೇಲೆ ಜಯಧ್ವನಿಗೈಯುವೆನು.
108:10b.PSA.108.010 ಬಲ ವುಳ್ಳ ಪಟ್ಟಣಕ್ಕೆ ನನ್ನನ್ನು ಕರೆತರುವವನಾರು? ಏದೋಮಿನ ವರೆಗೆ ನನ್ನನ್ನು ನಡಿಸುವವನಾರು?
108:11b.PSA.108.011 ದೇವರೇ, ನಮ್ಮನ್ನು ತೊರೆದು ಬಿಟ್ಟವನು ನೀನೇ ಅಲ್ಲವೋ? ನಮ್ಮ ಸೈನ್ಯಗಳ ಸಂಗಡ ಹೊರಟು ಹೋಗದೆ ಇದ್ದ ದೇವರು ನೀನಲ್ಲವೋ?
108:12b.PSA.108.012 ಇಕ್ಕಟ್ಟಿ ನಲ್ಲಿರುವ ನಮಗೆ ಸಹಾಯಕೊಡು; ಮನುಷ್ಯನ ಸಹಾಯವು ವ್ಯರ್ಥವಾಗಿದೆ.ದೇವರಿಂದ ಪರಾ ಕ್ರಮ ಕಾರ್ಯಗಳನ್ನು ಮಾಡುವೆವು; ಆತನೇ ನಮ್ಮ ವೈರಿಗಳನ್ನು ತುಳಿದುಬಿಡುವನು.
108:13b.PSA.108.013 ದೇವರಿಂದ ಪರಾ ಕ್ರಮ ಕಾರ್ಯಗಳನ್ನು ಮಾಡುವೆವು; ಆತನೇ ನಮ್ಮ ವೈರಿಗಳನ್ನು ತುಳಿದುಬಿಡುವನು.
109
109:1b.PSA.109.001 ನನ್ನ ಸ್ತೋತ್ರದ ದೇವರೇ, ಮೌನವಾಗಿರಬೇಡ.
109:2b.PSA.109.002 ದುಷ್ಟನ ಬಾಯಿ ಯನ್ನೂ ಮೋಸದ ಬಾಯಿಯನ್ನೂ ನನಗೆ ವಿರೋಧ ವಾಗಿ ತೆರೆದಿವೆ; ಸುಳ್ಳಿನ ನಾಲಿಗೆಯಿಂದ ನನಗೆ ವಿರೋಧವಾಗಿ ಮಾತಾಡಿದ್ದಾರೆ.
109:3b.PSA.109.003 ಹಗೆಯ ಮಾತು ಗಳಿಂದ ಅವರು ನನ್ನನ್ನು ಸುತ್ತಿಕೊಂಡು ನನಗೆ ವಿರೋಧವಾಗಿ ಕಾರಣವಿಲ್ಲದೆ ಯುದ್ಧಮಾಡಿದ್ದಾರೆ.
109:4b.PSA.109.004 ನನ್ನ ಪ್ರೀತಿಗೆ ಬದಲಾಗಿ ನನ್ನನ್ನು ಎದುರಿಸುತ್ತಾರೆ; ಆದರೆ ನಾನು ಪ್ರಾರ್ಥನೆಯಲ್ಲಿಯೇ ಇದ್ದೇನೆ.
109:5b.PSA.109.005 ನನ್ನ ಮೇಲಿಗೆ ಬದಲಾಗಿ ಕೇಡನ್ನೂ ಪ್ರೀತಿಗೆ ಬದಲಾಗಿ ಹಗೆಯನ್ನೂ ನನಗೆ ವಿರೋಧ ವಾಗಿ ಮಾಡಿದ್ದಾರೆ.
109:6b.PSA.109.006 ದುಷ್ಟನನ್ನು ಅವನ ಮೇಲೆ ನೇಮಿಸು; ಸೈತಾನನು ಅವನ ಬಲಗಡೆಯಲ್ಲಿ ನಿಂತುಕೊಳ್ಳಲಿ.
109:7b.PSA.109.007 ಅವನು ನ್ಯಾಯ ತೀರಿಸಲ್ಪಡುವಾಗ ದುಷ್ಟನೆಂದು ತೀರ್ಪು ಹೊಂದಲಿ. ಅವನ ಪ್ರಾರ್ಥನೆಯು ಪಾಪವಾಗಲಿ.
109:8b.PSA.109.008 ಅವನ ದಿವಸಗಳು ಸ್ವಲ್ಪವಾಗಿರಲಿ; ಅವನ ಉದ್ಯೋ ಗವನ್ನು ಬೇರೊಬ್ಬನು ತಕ್ಕೊಳ್ಳಲಿ.
109:9b.PSA.109.009 ಅವನ ಮಕ್ಕಳು ದಿಕ್ಕಿಲ್ಲದವರೂ ಹೆಂಡತಿ ವಿಧವೆಯೂ ಆಗಲಿ.
109:10b.PSA.109.010 ಅವನ ಮಕ್ಕಳು ಅಲೆದು ಅಲೆದು ಭಿಕ್ಷೆಬೇಡಿ ತಮ್ಮ ಹಾಳು ಸ್ಥಳಗಳೊಳಗಿಂದ ರೊಟ್ಟಿಯನ್ನು ಹುಡುಕಲಿ.
109:11b.PSA.109.011 ಸಾಲಗಾರನು ಅವನಿಗೆ ಇರುವದನ್ನೆಲ್ಲಾ ದೋಚಿ ಕೊಳ್ಳಲಿ; ಅನ್ಯರು ಅವನ ಕಷ್ಟಾರ್ಜಿತವನ್ನು ಸುಲು ಕೊಳ್ಳಲಿ.
109:12b.PSA.109.012 ಅವನಿಗೆ ಕರುಣೆ ತೋರಿಸುವವನು ಯಾವನೂ ಇಲ್ಲದೆ ಇರಲಿ; ಇಲ್ಲವೆ ದಿಕ್ಕಿಲ್ಲದ ಅವನ ಮಕ್ಕಳನ್ನು ಕರುಣಿಸುವವನು ಯಾವನೂ ಇಲ್ಲದೆ ಇರಲಿ.
109:13b.PSA.109.013 ಅವನ ಸಂತಾನವು ನಿರ್ನಾಮವಾಗಲಿ; ಎರಡನೇ ತಲಾಂತರದಲ್ಲಿ ಅವರ ಹೆಸರು ಅಳಿದು ಹೋಗಲಿ.
109:14b.PSA.109.014 ಅವನ ತಂದೆಗಳ ಅಕ್ರಮವು ಕರ್ತನ ಮುಂದೆ ಜ್ಞಾಪಕವಾಗಲಿ; ಅವನ ತಾಯಿಯ ಪಾಪವು ಅಳಿದು ಹೋಗದಿರಲಿ.
109:15b.PSA.109.015 ಅವು ಯಾವಾಗಲೂ ಕರ್ತನ ಮುಂದೆ ಇರಲಿ; ಆತನು ಅವನ ಜ್ಞಾಪಕವನ್ನು ಭೂಮಿಯೊಳಗಿಂದ ಕಡಿದುಬಿಡಲಿ.
109:16b.PSA.109.016 ಅವನು ಕರುಣೆ ತೋರಿಸುವದನ್ನು ಮರೆತು ಹೃದಯದಲ್ಲಿ ನೊಂದವ ರನ್ನು ಕೊಲ್ಲುವದಕ್ಕೂ ಬಡವನನ್ನೂ ಕೊರತೆಯುಳ್ಳ ವವನ್ನೂ ಹಿಂಸಿಸಿದನು.
109:17b.PSA.109.017 ಅವನು ಶಾಪವನ್ನು ಪ್ರೀತಿ ಮಾಡಿದನು; ಅದು ಅವನಿಗೆ ಬರಲಿ. ಆಶೀರ್ವಾದಕ್ಕೆ ಮೆಚ್ಚಲಿಲ್ಲ; ಅದು ಅವನಿಗೆ ದೂರವಾಗಿರಲಿ.
109:18b.PSA.109.018 ಅವನು ತನ್ನ ವಸ್ತ್ರದಂತೆ ಶಾಪವನ್ನು ಹೊದ್ದುಕೊಂಡನು; ಅದು ನೀರಿನಂತೆ ಅವನ ಅಂತರಂಗದಲ್ಲಿಯೂ ಎಣ್ಣೆಯಂತೆ ಅವನ ಎಲುಬುಗಳಲ್ಲಿಯೂ ಸೇರಲಿ.
109:19b.PSA.109.019 ಅದು ಅವ ನಿಗೆ ತೊಟ್ಟುಕೊಂಡ ಅಂಗಿಯ ಹಾಗೆಯೂ ಯಾವಾ ಗಲೂ ನಡುವಿಗೆ ಕಟ್ಟುವ ನಡುಕಟ್ಟಿನ ಹಾಗೆಯೂ ಇರಲಿ.
109:20b.PSA.109.020 ಇದು ನನ್ನ ಪ್ರಾಣಕ್ಕೆ ವಿರೋಧವಾಗಿ ಕೇಡು ಮಾತಾಡುವ ನನ್ನ ಎದುರಾಳಿಗಳಿಗೆ ಕರ್ತನಿಂದ ಪ್ರತಿಫಲವಾಗಿರಲಿ.
109:21b.PSA.109.021 ಕರ್ತನಾದ ಓ ದೇವರೇ, ನಿನ್ನ ಹೆಸರಿಗೋಸ್ಕರ ನನಗೆ ಸಹಾಯಮಾಡು; ನಿನ್ನ ಕರುಣೆಯು ಒಳ್ಳೇದಾಗಿ ರುವದರಿಂದ ನನ್ನನ್ನು ಬಿಡಿಸು.
109:22b.PSA.109.022 ನಾನು ದೀನನೂ ಬಡವನೂ ಆಗಿದ್ದೇನೆ. ನನ್ನ ಹೃದಯವು ಅಂತರಂಗದಲ್ಲಿ ಗಾಯಗೊಂಡಿದೆ.
109:23b.PSA.109.023 ನಾನು ಸಂಜೆಯ ನೆರಳಿನಂತೆ ಗತಿಸಿಹೋಗುತ್ತಿದ್ದೇನೆ; ಮಿಡತೆಯ ಹಾಗೆ ಬಡಿಯಲ್ಪ ಟ್ಟಿದ್ದೇನೆ;
109:24b.PSA.109.024 ನನ್ನ ಮೊಣಕಾಲುಗಳು ಉಪವಾಸದಿಂದ ಬಲಹೀನವಾಗಿವೆ; ನನ್ನ ಮಾಂಸಕ್ಕೆ ಸಾರವಿಲ್ಲದೆ ಹೋಯಿತು.
109:25b.PSA.109.025 ನಾನು ಅವರಿಗೆ ನಿಂದೆಯಾಗಿದ್ದೇನೆ; ನನ್ನನ್ನು ನೋಡಿ ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾರೆ.
109:26b.PSA.109.026 ನನ್ನ ದೇವರಾದ ಓ ಕರ್ತನೇ, ನನಗೆ ಸಹಾಯ ಮಾಡು; ನಿನ್ನ ಕೃಪೆಯ ಪ್ರಕಾರ ನನ್ನನ್ನು ರಕ್ಷಿಸು.
109:27b.PSA.109.027 ಕರ್ತನೇ, ಇದು ನಿನ್ನ ಕೈ ಎಂದೂ ಇದನ್ನು ನೀನು ಮಾಡಿದ್ದೀ ಎಂದೂ ಅವರು ತಿಳುಕೊಳ್ಳಲಿ.
109:28b.PSA.109.028 ಅವರು ಶಪಿಸಲಿ; ಆದರೆ ನೀನು ಆಶೀರ್ವದಿಸು; ಅವರು ಎದ್ದು ನಾಚಿಕೆಪಡಲಿ; ಆದರೆ ನಿನ್ನ ಸೇವಕನು ಸಂತೋ ಷಿಸಲಿ.
109:29b.PSA.109.029 ನನ್ನ ಎದುರಾಳಿಗಳು ಅವಮಾನವನ್ನು ಹೊದ್ದುಕೊಂಡು ತಮ್ಮ ನಾಚಿಕೆಯನ್ನು ಹೊದಿಕೆಯಂತೆ ತೊಟ್ಟುಕೊಳ್ಳಲಿ.
109:30b.PSA.109.030 ಕರ್ತನನ್ನು ನನ್ನ ಬಾಯಿಯಿಂದ ಬಹಳವಾಗಿ ಕೊಂಡಾಡುವೆನು; ಹೌದು, ಅನೇಕರ ಮಧ್ಯದಲ್ಲಿ ಆತನನ್ನು ಸ್ತುತಿಸುವೆನು.ಬಡವನ ಬಲಪಾರ್ಶ್ವದಲ್ಲಿ ಅವನ ಪ್ರಾಣಕ್ಕೆ ನ್ಯಾಯತೀರಿಸುವ ವರೊಳಗಿಂದ ಅವನನ್ನು ರಕ್ಷಿಸುವದಕ್ಕೆ ಆತನು ನಿಂತುಕೊಳ್ಳುವನು.
109:31b.PSA.109.031 ಬಡವನ ಬಲಪಾರ್ಶ್ವದಲ್ಲಿ ಅವನ ಪ್ರಾಣಕ್ಕೆ ನ್ಯಾಯತೀರಿಸುವ ವರೊಳಗಿಂದ ಅವನನ್ನು ರಕ್ಷಿಸುವದಕ್ಕೆ ಆತನು ನಿಂತುಕೊಳ್ಳುವನು.
110
110:1b.PSA.110.001 ಕರ್ತನು ನನ್ನ ಕರ್ತನಿಗೆ ಹೇಳಿದ್ದೇನೆಂದರೆ ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನನ್ನ ಬಲ ಪಾರ್ಶ್ವದಲ್ಲಿ ಕುಳಿತುಕೋ,
110:2b.PSA.110.002 ನಿನ್ನ ಬಲಕ್ಕಾಗಿ ಚೀಯೋ ನಿನಿಂದ ಕರ್ತನು ದಂಡವನ್ನು ಕಳುಹಿಸುವನು; ನಿನ್ನ ಶತ್ರುಗಳ ಮಧ್ಯದಲ್ಲಿ ದೊರೆತನಮಾಡು.
110:3b.PSA.110.003 ಪರಿಶುದ್ಧ ತೆಯ ಸೌಂದರ್ಯಗಳಲ್ಲಿ ಉದಯದ ಗರ್ಭದಲ್ಲಿಂದ ನಿನ್ನ ಜನರು ಬಲದ ದಿವಸದಲ್ಲಿ ಸ್ವಇಷ್ಟವುಳ್ಳವ ರಾಗಿರುವರು; ಇಬ್ಬನಿಯಂತೆ ನಿನ್ನ ಯೌವನವು ನಿನಗೆ ಇರುವದು.
110:4b.PSA.110.004 ನೀನು ಎಂದೆಂದಿಗೂ ಮೆಲ್ಕೀಜೆದೇಕನ ತರದ ಯಾಜಕನಾಗಿದ್ದೀ ಎಂದು ಕರ್ತನು ಆಣೆಯಿಟ್ಟು ನುಡಿ ದಿದ್ದಾನೆ; ಪಶ್ಚಾತ್ತಾಪಪಡನು.
110:5b.PSA.110.005 ಕರ್ತನು ನಿನ್ನ ಬಲ ಪಾರ್ಶ್ವದಲ್ಲಿದ್ದು ತನ್ನ ಕೋಪದ ದಿವಸದಲ್ಲಿ ಅರಸ ರನ್ನು ಹೊಡೆಯುವನು.
110:6b.PSA.110.006 ಆತನು ಅನ್ಯಜನರಲ್ಲಿ ನ್ಯಾಯತೀರಿಸಿ ಹೆಣಗಳಿಂದ ತುಂಬಿಸುವನು; ಬಹು ದೇಶಗಳ ಮೇಲಿರುವ ತಲೆ ಗಳನ್ನು ಗಾಯಮಾಡುವನು.ದಾರಿಯಲ್ಲಿ ಹಳ್ಳದ ನೀರು ಕುಡಿಯುವನು; ಆದದರಿಂದ ಆತನು ತಲೆ ಎತ್ತುವನು.
110:7b.PSA.110.007 ದಾರಿಯಲ್ಲಿ ಹಳ್ಳದ ನೀರು ಕುಡಿಯುವನು; ಆದದರಿಂದ ಆತನು ತಲೆ ಎತ್ತುವನು.
111
111:1b.PSA.111.001 ಕರ್ತನನ್ನು ಸ್ತುತಿಸಿರಿ; ನಾನು ಕರ್ತನನ್ನು ಪೂರ್ಣಹೃದಯದಿಂದ ಯಥಾರ್ಥರ ಕೂಟದಲ್ಲಿಯೂ ಸಭೆಯಲ್ಲಿಯೂ ಕೊಂಡಾಡುವೆನು.
111:2b.PSA.111.002 ಕರ್ತನ ಕೆಲಸಗಳು ದೊಡ್ಡವು; ಅವುಗಳಲ್ಲಿ ಸಂತೋಷಪಡುವವರೆಲ್ಲರು ಅವುಗಳನ್ನು ಶೋಧಿಸುತ್ತಾರೆ.
111:3b.PSA.111.003 ಆತನ ಕೆಲಸವು ಪ್ರಭೆಯೂ ಮಹಿಮೆಯೂ ಉಳ್ಳದ್ದು; ಆತನ ನೀತಿಯು ಎಂದೆಂದಿಗೂ ನಿಲ್ಲುತ್ತದೆ.
111:4b.PSA.111.004 ಆತನು ತನ್ನ ಅದ್ಭುತಗಳನ್ನು ಕುರಿತು ಜ್ಞಾಪಕಮಾಡಿದ್ದಾನೆ; ಕರ್ತನು ಕೃಪಾಳುವೂ ಅಂತಃ ಕರಣವೂ ಉಳ್ಳಾತನೇ.
111:5b.PSA.111.005 ಆತನು ತನಗೆ ಭಯಪಡುವ ವರಿಗೆ ಆಹಾರ ಕೊಟ್ಟಿದ್ದಾನೆ; ಯುಗಯುಗಕ್ಕೂ ತನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವನು.
111:6b.PSA.111.006 ಅನ್ಯ ಜನರ ಬಾಧ್ಯತೆಯನ್ನು ಅವರಿಗೆ ಕೊಡುವ ಹಾಗೆ ತನ್ನ ಕೆಲಸಗಳ ಬಲವನ್ನು ಜನರಿಗೆ ತೋರಿಸಿದ್ದಾನೆ.
111:7b.PSA.111.007 ಆತನ ಕೈ ಕೆಲಸಗಳು ಸತ್ಯವೂ ನ್ಯಾಯವೂ ಆಗಿವೆ; ಆತನ ಕಟ್ಟಳೆಗಳೆಲ್ಲಾ ನಿಶ್ಚಯವಾದವುಗಳು.
111:8b.PSA.111.008 ಅವು ಯುಗಯುಗಾಂತರಗಳಿಗೂ ನೆಲೆಯಾಗಿ ನಿಲ್ಲುತ್ತವೆ. ಅವು ಸತ್ಯದಲ್ಲಿಯೂ ಯಥಾರ್ಥತೆಯಲ್ಲಿಯೂ ವಿಧಿಸ ಲ್ಪಟ್ಟಿವೆ.
111:9b.PSA.111.009 ತನ್ನ ಜನರಿಗೆ ವಿಮೋಚನೆಯನ್ನು ಕಳುಹಿ ಸಿದನು; ಯುಗಯುಗಕ್ಕೂ ತನ್ನ ಒಡಂಬಡಿಕೆಯನ್ನು ಆಜ್ಞಾಪಿಸಿದನು; ಆತನ ಹೆಸರು ಪರಿಶುದ್ಧವೂ ಘನವೂ ಆಗಿದೆ.ಕರ್ತನ ಭಯವು ಜ್ಞಾನದ ಮೂಲವು; ಆತನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ತಿಳುವಳಿಕೆಯಿದೆ; ಆತನ ಸ್ತೋತ್ರವು ಎಂದೆಂದಿಗೂ ನಿಲ್ಲುತ್ತದೆ.
111:10b.PSA.111.010 ಕರ್ತನ ಭಯವು ಜ್ಞಾನದ ಮೂಲವು; ಆತನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ತಿಳುವಳಿಕೆಯಿದೆ; ಆತನ ಸ್ತೋತ್ರವು ಎಂದೆಂದಿಗೂ ನಿಲ್ಲುತ್ತದೆ.
112
112:1b.PSA.112.001 ನೀವು ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಭಯಪಟ್ಟು ಆತನ ಆಜ್ಞೆಗಳಲ್ಲಿ ಬಹಳವಾಗಿ ಸಂತೋಷಿಸುವ ಮನುಷ್ಯನು ಧನ್ಯನು.
112:2b.PSA.112.002 ಅವನ ಸಂತತಿಯು ಭೂಮಿಯಲ್ಲಿ ಪರಾಕ್ರಮಶಾಲಿ ಯಾಗಿರುವದು. ಯಥಾರ್ಥರ ಸಂತತಿಯು ಆಶೀ ರ್ವಾದ ಹೊಂದುವದು.
112:3b.PSA.112.003 ದ್ರವ್ಯವೂ ಐಶ್ವರ್ಯವೂ ಅವನ ಮನೆಯಲ್ಲಿ ಅವೆ; ಆತನ ನೀತಿಯು ಎಂದೆಂ ದಿಗೂ ನಿಲ್ಲುತ್ತದೆ.
112:4b.PSA.112.004 ಯಥಾರ್ಥರಿಗೆ ಕತ್ತಲಲ್ಲಿ ಬೆಳಕು ಹುಟ್ಟುತ್ತದೆ; ಆತನು ಕೃಪೆಯೂ ಅಂತಃಕರಣವೂ ನೀತಿ ಯೂ ಉಳ್ಳಾತನೇ.
112:5b.PSA.112.005 ಒಳ್ಳೇಮನುಷ್ಯನು ದಯೆ ತೋರಿಸಿ ಸಾಲಕೊಡುತ್ತಾನೆ; ತನ್ನ ಕಾರ್ಯಗಳನ್ನು ನ್ಯಾಯದಿಂದ ನಡಿಸುವನು.
112:6b.PSA.112.006 ನಿಶ್ಚಯವಾಗಿ ಅವನು ಎಂದೆಂದಿಗೂ ಕದಲನು; ನೀತಿವಂತನು ನಿತ್ಯವಾಗಿ ಜ್ಞಾಪಕದಲ್ಲಿ ಇರುವನು.
112:7b.PSA.112.007 ಅವನು ಕೆಟ್ಟಸುದ್ದಿಗೆ ಭಯಪಡನು; ಅವನ ಹೃದಯವು ಕರ್ತನಲ್ಲಿ ಭರವಸವಿಟ್ಟು ಸ್ಥಿರವಾಗಿದೆ.
112:8b.PSA.112.008 ಅವನ ಹೃದಯವು ದೃಢವಾಗಿದೆ; ತನ್ನ ವೈರಿಗಳ ಮೇಲೆ ತನ್ನ ಇಷ್ಟವನ್ನು ನೋಡುವ ಮಟ್ಟಿಗೂ ಭಯಪಡನು.
112:9b.PSA.112.009 ಅವನು ಬಡವರಿಗೆ ಧಾರಾಳವಾಗಿ ಕೊಡುತ್ತಾನೆ; ಅವನ ನೀತಿ ಎಂದೆಂದಿಗೂ ನಿಲ್ಲು ತ್ತದೆ; ಅವನ ಕೊಂಬು ಘನದಿಂದ ಎತ್ತಲ್ಪಡುವದು.ದುಷ್ಟನು ನೋಡಿ ದುಃಖಪಡುವನು; ತನ್ನ ಹಲ್ಲು ಗಳನ್ನು ಕಡಿದು ಕರಗಿಹೋಗುವನು; ದುಷ್ಟರ ಆಶೆಯು ನಾಶವಾಗುವದು.
112:10b.PSA.112.010 ದುಷ್ಟನು ನೋಡಿ ದುಃಖಪಡುವನು; ತನ್ನ ಹಲ್ಲು ಗಳನ್ನು ಕಡಿದು ಕರಗಿಹೋಗುವನು; ದುಷ್ಟರ ಆಶೆಯು ನಾಶವಾಗುವದು.
113
113:1b.PSA.113.001 ಕರ್ತನನ್ನು ಸ್ತುತಿಸಿರಿ; ಕರ್ತನ ಸೇವಕರೇ; ಸ್ತುತಿಸಿರಿ; ಕರ್ತನ ಹೆಸರನ್ನು ಸ್ತುತಿಸಿರಿ;
113:2b.PSA.113.002 ಇಂದಿನಿಂದ ಯುಗಯುಗಕ್ಕೂ ಕರ್ತನ ಹೆಸರಿಗೆ ಸ್ತುತಿಯುಂಟಾಗಲಿ.
113:3b.PSA.113.003 ಸೂರ್ಯೋದಯ ದಿಂದ ಅದರ ಅಸ್ತಮಾನದ ವರೆಗೂ ಕರ್ತನ ಹೆಸರು ಸ್ತುತಿಸಲ್ಪಡತಕ್ಕದ್ದು.
113:4b.PSA.113.004 ಕರ್ತನು ಎಲ್ಲಾ ಜನಾಂಗಗಳ ಮೇಲೆ ಉನ್ನತವಾದವನು; ಆತನ ಮಹಿಮೆಯು ಆಕಾ ಶಗಳ ಮೇಲೆ ಇದೆ.
113:5b.PSA.113.005 ನಮ್ಮ ದೇವರಾದ ಕರ್ತನ ಹಾಗೆ ಯಾರಿದ್ದಾರೆ? ಉನ್ನತದಲ್ಲಿ ಆತನು ವಾಸಿಸುತ್ತಾನೆ.
113:6b.PSA.113.006 ಆಕಾಶದ ಮೇಲೆಯೂ ಭೂಮಿಯ ಮೇಲೆಯೂ ದೃಷ್ಟಿ ಇಡುವದಕ್ಕೆ ಆತನು ತನ್ನನ್ನು ತಗ್ಗಿಸಿಕೊಳ್ಳುತ್ತಾನೆ.
113:7b.PSA.113.007 ಅಧಿಪತಿಗಳ ಸಂಗಡವೂ ತನ್ನ ಜನರ ಅಧಿಪತಿಗಳ ಸಂಗಡವೂ ಕುಳ್ಳಿರಿಸುವದಕ್ಕೆ,
113:8b.PSA.113.008 ಧೂಳಿನೊಳಗಿಂದ ದರಿದ್ರನನ್ನು ಏಳಮಾಡಿ ತಿಪ್ಪೆಯೊಳಗಿಂದ ಬಡವನನ್ನು ಎತ್ತುತ್ತಾನೆ.ಬಂಜೆಯಾದವಳನ್ನು ಮಕ್ಕಳ ಸಂತೋಷ ವುಳ್ಳ ತಾಯಿಯಾಗಿ ಮನೆಯಲ್ಲಿ ನಿವಾಸಿಸುವಂತೆ ಮಾಡುತ್ತಾನೆ ಕರ್ತನನ್ನು ಸ್ತುತಿಸಿರಿ.
113:9b.PSA.113.009 ಬಂಜೆಯಾದವಳನ್ನು ಮಕ್ಕಳ ಸಂತೋಷ ವುಳ್ಳ ತಾಯಿಯಾಗಿ ಮನೆಯಲ್ಲಿ ನಿವಾಸಿಸುವಂತೆ ಮಾಡುತ್ತಾನೆ ಕರ್ತನನ್ನು ಸ್ತುತಿಸಿರಿ.
114
114:1b.PSA.114.001 ಇಸ್ರಾಯೇಲನು ಐಗುಪ್ತದೊಳಗಿಂದಲೂ ಯಾಕೋಬನ ಮನೆ ತನವು ಅನ್ಯಭಾಷೆಯುಳ್ಳ ಜನರೊಳಗಿಂದಲೂ ಹೊರಟಾಗ
114:2b.PSA.114.002 ಯೆಹೂದನು ಆತನ ಪರಿಶುದ್ಧ ಸ್ಥಳವೂ ಇಸ್ರಾಯೇಲನು ಆತನ ದೊರೆತನವೂ ಆಗಿದ್ದರು.
114:3b.PSA.114.003 ಸಮುದ್ರವು ನೋಡಿ ಓಡಿಹೋಯಿತು; ಯೊರ್ದನ್ ಹಿಂತಿರುಗಿತು.
114:4b.PSA.114.004 ಬೆಟ್ಟಗಳು ಟಗರುಗಳ ಹಾಗೆಯೂ ಗುಡ್ಡಗಳು ಕುರಿಮರಿಗಳ ಹಾಗೆಯೂ ಹಾರಾಡಿದವು.
114:5b.PSA.114.005 ಸಮುದ್ರವೇ, ನಿನಗೆ ಏನಾಯಿತು? ಯಾಕೆ ಓಡಿ ಹೋಗುತ್ತೀ? ಯೊರ್ದನೇ, ಯಾಕೆ ಹಿಂದಿರುಗುತ್ತೀ?
114:6b.PSA.114.006 ಬೆಟ್ಟಗಳೇ, ಟಗರುಗಳ ಹಾಗೆಯೂ ಚಿಕ್ಕ ಗುಡ್ಡಗಳೇ, ನೀವು ಕುರಿಮರಿಗಳ ಹಾಗೆಯೂ ಹಾರಾಡುವದು ಯಾಕೆ?
114:7b.PSA.114.007 ಬಂಡೆಯನ್ನು ನೀರಿನ ಕೆರೆಗೂ ಬೆಣಚು ಕಲ್ಲನ್ನು ನೀರಿನ ಬುಗ್ಗೆಗೂ ಮಾರ್ಪಡಿಸುವಕರ್ತನ ಸನ್ನಿಧಿ ಯಲ್ಲಿಯೂ ಯಾಕೋಬನ ದೇವರ ಮುಂದೆಯೂ ಭೂಮಿಯೇ, ನಡುಗು.
114:8b.PSA.114.008 ಕರ್ತನ ಸನ್ನಿಧಿ ಯಲ್ಲಿಯೂ ಯಾಕೋಬನ ದೇವರ ಮುಂದೆಯೂ ಭೂಮಿಯೇ, ನಡುಗು.
115
115:1b.PSA.115.001 ನಮಗಲ್ಲ, ಓ ಕರ್ತನೇ, ನಮಗಲ್ಲ, ನಿನ್ನ ಹೆಸರಿಗೆ ಮಾತ್ರ, ನಿನ್ನ ಕರುಣೆಯ ನಿಮಿತ್ತವೂ ನಿನ್ನ ಸತ್ಯದ ನಿಮಿತ್ತವೂ ಘನವುಂಟಾಗಲಿ.
115:2b.PSA.115.002 ಅವರ ದೇವರು ಎಲ್ಲಿ ಎಂದು ಅನ್ಯ ಜನಾಂಗಗಳು ಯಾಕೆ ಹೇಳಬೇಕು?
115:3b.PSA.115.003 ನಮ್ಮ ದೇವರು ಪರಲೋಕದಲ್ಲಿದ್ದಾನೆ; ತಾನು ಇಚ್ಚಿಸುವ ದನ್ನೆಲ್ಲಾ ಮಾಡುತ್ತಾನೆ.
115:4b.PSA.115.004 ಅವರ ವಿಗ್ರಹಗಳು ಬೆಳ್ಳಿಯೂ ಬಂಗಾರವೂ ಮನುಷ್ಯನ ಕೈಕೆಲಸವೂ ಆಗಿವೆ.
115:5b.PSA.115.005 ಅವುಗಳಿಗೆ ಬಾಯಿ ಉಂಟು; ಮಾತಾಡುವದಿಲ್ಲ; ಕಣ್ಣುಗಳುಂಟು; ನೋಡು ವದಿಲ್ಲ.
115:6b.PSA.115.006 ಕಿವಿಗಳುಂಟು; ಕೇಳುವದಿಲ್ಲ. ಮೂಗು ಉಂಟು; ಮೂಸುವದಿಲ್ಲ.
115:7b.PSA.115.007 ಕೈಗಳುಂಟು; ಮುಟ್ಟುವ ದಿಲ್ಲ. ಕಾಲುಗಳುಂಟು; ನಡೆಯುವದಿಲ್ಲ. ತಮ್ಮ ಗಂಟಲಿನಿಂದ ಮಾತನಾಡುವದಿಲ್ಲ,
115:8b.PSA.115.008 ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸವಿಡುವವ ರೆಲ್ಲರೂ ಅವುಗಳ ಹಾಗೆಯೇ ಇದ್ದಾರೆ.
115:9b.PSA.115.009 ಓ ಇಸ್ರಾಯೇಲೇ, ಕರ್ತನಲ್ಲಿ ಭರವಸವಿಡು; ಆತನೇ ಅವರ ಸಹಾಯವೂ ಗುರಾಣಿಯೂ ಆಗಿ ದ್ದಾನೆ.
115:10b.PSA.115.010 ಆರೋನನ ಮನೆಯವರೇ, ಕರ್ತನಲ್ಲಿ ಭರವಸವಿಡಿರಿ; ಆತನೇ ಅವರ ಸಹಾಯವೂ ಗುರಾ ಣಿಯೂ ಆಗಿದ್ದಾನೆ.
115:11b.PSA.115.011 ಕರ್ತನಿಗೆ ಭಯಪಡುವವರೇ, ಕರ್ತನಲ್ಲಿ ಭರವಸವಿಡಿರಿ; ಆತನೇ ಅವರ ಸಹಾ ಯವೂ ಗುರಾಣಿಯೂ ಆಗಿದ್ದಾನೆ.
115:12b.PSA.115.012 ಕರ್ತನು ನಮ್ಮನ್ನು ಜ್ಞಾಪಕಮಾಡಿಕೊಂಡಿದ್ದಾನೆ,ಆತನು ನಮ್ಮನ್ನು ಆಶೀರ್ವದಿಸುವನು; ಇಸ್ರಾಯೇಲಿನ ಮನೆಯನ್ನು ಆಶೀರ್ವದಿಸುವನು; ಆರೋನನ ಮನೆ ಯನ್ನು ಆಶೀರ್ವದಿಸುವನು.
115:13b.PSA.115.013 ಕರ್ತನಿಗೆ ಭಯ ಪಡುವವರಾದ ಹಿರಿಯರ ಸಂಗಡ ಕಿರಿಯರನ್ನು ಆಶೀರ್ವದಿಸುವನು.
115:14b.PSA.115.014 ಕರ್ತನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಅಭಿವೃದ್ಧಿ ಮಾಡುವನು.
115:15b.PSA.115.015 ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ ಕರ್ತನಿಂದ ನೀವು ಆಶೀರ್ವದಿಸಲ್ಪಟ್ಟವರು.
115:16b.PSA.115.016 ಆಕಾಶಗಳು ಕರ್ತನವುಗಳೇ. ಆತನು ಭೂಮಿ ಯನ್ನು ನರಪುತ್ರರಿಗೆ ಕೊಟ್ಟಿದ್ದಾನೆ.
115:17b.PSA.115.017 ಸತ್ತವರೂ ಮೌನಕ್ಕೆ ಇಳಿದವರೆಲ್ಲರೂ ಕರ್ತನನ್ನು ಸ್ತುತಿಸುವ ದಿಲ್ಲ.ನಾವಾದರೋ ಇಂದಿನಿಂದ ಯುಗಯುಗಕ್ಕೂ ಕರ್ತನನ್ನು ಸ್ತುತಿಸುವೆವು. ಕರ್ತನನ್ನು ಸ್ತುತಿಸಿರಿ.
115:18b.PSA.115.018 ನಾವಾದರೋ ಇಂದಿನಿಂದ ಯುಗಯುಗಕ್ಕೂ ಕರ್ತನನ್ನು ಸ್ತುತಿಸುವೆವು. ಕರ್ತನನ್ನು ಸ್ತುತಿಸಿರಿ.
116
116:1b.PSA.116.001 ನಾನು ಕರ್ತನನ್ನು ಪ್ರೀತಿ ಮಾಡುತ್ತೇನೆ.ಆತನು ನನ್ನ ಸ್ವರವನ್ನೂ ವಿಜ್ಞಾಪನೆಯನ್ನೂ ಕೇಳಿದ್ದಾನೆ.
116:2b.PSA.116.002 ಆತನು ನನ್ನ ಮೊರೆಯನ್ನು ಆಲಿಸಿದ್ದರಿಂದ ನಾನು ಜೀವದಿಂದಿರುವ ವರೆಗೂ ಆತನನ್ನೇ ಬೇಡುವೆನು.
116:3b.PSA.116.003 ಮರಣದ ದುಃಖ ಗಳು ನನ್ನನ್ನು ಆವರಿಸಿಕೊಂಡವು; ನರಕದ ಬಾಧೆ ಗಳೂ ಇಕ್ಕಟ್ಟೂ ದುಃಖವೂ ನನ್ನನ್ನು ಹಿಡಿದವು.
116:4b.PSA.116.004 ಆಗ ನಾನು ಅಯ್ಯೋ, ಕರ್ತನೇ, ನನ್ನ ಪ್ರಾಣವನ್ನು ತಪ್ಪಿಸು ಎಂದು ಕರ್ತನ ಹೆಸರಿನಲ್ಲಿ ಬೇಡಿದೆನು.
116:5b.PSA.116.005 ಕರ್ತನು ಕೃಪೆಯೂ ನೀತಿಯೂ ಉಳ್ಳವನು; ಹೌದು, ನಮ್ಮ ದೇವರು ಅಂತಃಕರಣವುಳ್ಳವನು.
116:6b.PSA.116.006 ಕರ್ತನು ಸಾಧು ಜನರನ್ನು ಕಾಪಾಡುತ್ತಾನೆ; ನಾನು ಕುಗ್ಗಿದವನಾದಾಗ ನನಗೆ ಸಹಾಯಮಾಡಿದನು.
116:7b.PSA.116.007 ನನ್ನ ಮನವೇ, ನಿನ್ನ ವಿಶ್ರಾಂತಿಗೆ ತಿರುಗಿಕೋ; ಕರ್ತನು ನಿನಗೆ ಉಪಕಾರ ಮಾಡಿದ್ದಾನೆ.
116:8b.PSA.116.008 ನೀನು ನನ್ನ ಪ್ರಾಣ ವನ್ನು ಮರಣಕ್ಕೂ ಕಣ್ಣುಗಳನ್ನು ಕಣ್ಣೀರಿಗೂ ನನ್ನ ಪಾದಗಳು ಬೀಳದಂತೆಯೂ ತಪ್ಪಿಸಿದ್ದೀ.
116:9b.PSA.116.009 ಜೀವಿತರ ದೇಶದಲ್ಲಿ ಕರ್ತನ ಮುಂದೆ ನಡೆದುಕೊಳ್ಳುವೆನು.
116:10b.PSA.116.010 ನಾನು ನಂಬಿದೆನು; ಆದದರಿಂದ ಮಾತಾಡಿದೆನು; ನಾನು ಬಹಳವಾಗಿ ಕುಗ್ಗಿಹೋದೆನು.
116:11b.PSA.116.011 ಮನುಷ್ಯ ರೆಲ್ಲರು ಸುಳ್ಳುಗಾರರೆಂದು ನಾನು ಆತುರತೆಯಿಂದ ಹೇಳಿದೆನು.
116:12b.PSA.116.012 ಆತನು ನನಗೆ ಮಾಡಿದ ಎಲ್ಲಾ ಉಪಕಾರಗಳಿಗೋಸ್ಕರ ನಾನು ಕರ್ತನಿಗೆ ಏನು ಬದಲು ಮಾಡಲಿ?
116:13b.PSA.116.013 ನಾನು ರಕ್ಷಣೆಯ ಪಾತ್ರೆಯನ್ನು ತಕ್ಕೊಂಡು, ಕರ್ತನ ಹೆಸರನ್ನು ಕರೆಯುವೆನು.
116:14b.PSA.116.014 ನನ್ನ ಪ್ರಮಾಣಗಳನ್ನು ಆತನ ಜನರೆಲ್ಲರ ಮುಂದೆಯೇ ಕರ್ತನಿಗೆ ಸಲ್ಲಿಸುವೆನು.
116:15b.PSA.116.015 ಕರ್ತನ ದೃಷ್ಟಿಯಲ್ಲಿ ಆತನ ಪರಿಶುದ್ಧರ ಮರಣವು ಅಮೂಲ್ಯವಾಗಿದೆ.
116:16b.PSA.116.016 ಓ ಕರ್ತನೇ, ನಿಜವಾಗಿ ನಾನು ನಿನ್ನ ಸೇವಕನು. ಹೌದು, ನಾನು ನಿನ್ನ ಸೇವಕನು ನಿನ್ನ ದಾಸಿಯ ಮಗನು; ನೀನು ನನ್ನ ಬಂಧನಗಳನ್ನು ಬಿಚ್ಚಿದ್ದೀ.
116:17b.PSA.116.017 ನಾನು ನಿನಗೆ ಸ್ತೋತ್ರದ ಬಲಿಯನ್ನು ಅರ್ಪಿಸುವೆನು; ಕರ್ತನ ಹೆಸರನ್ನು ಕರೆಯುವೆನು.
116:18b.PSA.116.018 ಓ ಯೆರೂಸಲೇಮೇ, ನನ್ನ ಪ್ರಮಾಣಗಳನ್ನು ಆತನ ಜನರೆಲ್ಲರ ಮುಂದೆಯೇ,ಅಂದರೆ ಕರ್ತನ ಆಲ ಯದ ಅಂಗಳಗಳ ಮಧ್ಯದಲ್ಲಿಯೇ ನಿನಗೆ ಸಲ್ಲಿಸು ವೆನು. ಕರ್ತನನ್ನು ಸ್ತುತಿಸಿರಿ.
116:19b.PSA.116.019 ಅಂದರೆ ಕರ್ತನ ಆಲ ಯದ ಅಂಗಳಗಳ ಮಧ್ಯದಲ್ಲಿಯೇ ನಿನಗೆ ಸಲ್ಲಿಸು ವೆನು. ಕರ್ತನನ್ನು ಸ್ತುತಿಸಿರಿ.
117
117:1b.PSA.117.001 ಎಲ್ಲಾ ಜನಾಂಗಗಳೇ, ಕರ್ತನನ್ನು ಸ್ತುತಿಸಿರಿ; ಸರ್ವಜನರೇ, ಕರ್ತನನ್ನು ಸ್ತುತಿಸಿರಿ.ಆತನ ಕರುಣಾಕಟಾಕ್ಷವು ನಮ್ಮ ಕಡೆ ದೊಡ್ಡದು; ಕರ್ತನ ಸತ್ಯವು ಯುಗಯುಗಕ್ಕೂ ಅದೆ. ಕರ್ತನನ್ನು ಸ್ತುತಿಸಿರಿ.
117:2b.PSA.117.002 ಆತನ ಕರುಣಾಕಟಾಕ್ಷವು ನಮ್ಮ ಕಡೆ ದೊಡ್ಡದು; ಕರ್ತನ ಸತ್ಯವು ಯುಗಯುಗಕ್ಕೂ ಅದೆ. ಕರ್ತನನ್ನು ಸ್ತುತಿಸಿರಿ.
118
118:1b.PSA.118.001 ಕರ್ತನಿಗೆ ಉಪಕಾರಸ್ತುತಿ ಮಾಡಿರಿ; ಆತನು ಒಳ್ಳೆಯವನು; ಆತನ ಕರು ಣೆಯು ಯುಗಯುಗಕ್ಕೂ ಇದೆ.
118:2b.PSA.118.002 ಆತನ ಕರುಣೆಯು ಯುಗಯುಗಕ್ಕೂ ಇದೆ ಎಂದು ಇಸ್ರಾಯೇಲ್ ಹೇಳಲಿ.
118:3b.PSA.118.003 ಆತನ ಕರುಣೆಯು ಯುಗಯುಗಕ್ಕೂ ಇದೆ ಎಂದು ಆರೋನನ ಮನೆಯವರು ಹೇಳಲಿ.
118:4b.PSA.118.004 ಆತನ ಕರುಣೆಯು ಯುಗಯುಗಕ್ಕೂ ಇದೆ ಎಂದು ಕರ್ತನಿಗೆ ಭಯಪಡುವವರು ಹೇಳಲಿ.
118:5b.PSA.118.005 ಇಕ್ಕಟ್ಟಿನೊಳಗಿಂದ ಕರ್ತನಿಗೆ ಕೂಗಿದೆನು; ಕರ್ತನು ಉತ್ತರ ಕೊಟ್ಟು ನನ್ನನ್ನು ವಿಶಾಲ ಸ್ಥಳದಲ್ಲಿ ನಿಲ್ಲಿಸಿ ದನು.
118:6b.PSA.118.006 ಕರ್ತನು ನನ್ನ ಪರವಾಗಿದ್ದಾನೆ; ನಾನು ಭಯಪಡೆನು; ಮನುಷ್ಯನು ನನಗೆ ಏನು ಮಾಡುವನು?
118:7b.PSA.118.007 ನನಗೆ ಸಹಾಯ ಮಾಡುವವರೊಂದಿಗೆ ಕರ್ತನು ನನ್ನ ಪಕ್ಷವನ್ನು ಹಿಡಿಯುತ್ತಾನೆ. ಆದದರಿಂದ ನಾನು ನನ್ನ ಹಗೆಯವರ ಮೇಲೆ ನನ್ನಾಶೆಯನ್ನು ತೀರಿಸು ವದನ್ನು ನಾನು ನೋಡುವೆನು.
118:8b.PSA.118.008 ಮನುಷ್ಯರಲ್ಲಿ ಭರ ವಸವಿಡುವದಕ್ಕಿಂತ ಕರ್ತನಲ್ಲಿ ನಂಬಿಕೆಯಿಡುವದು ಒಳ್ಳೇದು.
118:9b.PSA.118.009 ಅಧಿಪತಿಗಳಲ್ಲಿ ಭರವಸವಿಡುವದಕ್ಕಿಂತ ಕರ್ತನನ್ನು ನಂಬಿಕೊಳ್ಳುವದು ಒಳ್ಳೇದು.
118:10b.PSA.118.010 ಎಲ್ಲಾ ಜನಾಂಗದವರು ನನ್ನನ್ನು ಸುತ್ತಿಕೊಂಡರು; ನಾನು ಕರ್ತನ ಹೆಸರಿನಲ್ಲಿ ಅವರನ್ನು ನಾಶಮಾಡು ವೆನು.
118:11b.PSA.118.011 ಅವರು ನನ್ನನ್ನು ಸುತ್ತಿಕೊಂಡರು; ಹೌದು, ನನ್ನನ್ನು ಸುತ್ತಿಕೊಂಡರು; ಕರ್ತನ ಹೆಸರಿನಲ್ಲಿ ಅವ ರನ್ನು ಸಂಹರಿಸುವೆನು.
118:12b.PSA.118.012 ಜೇನ್ನೊಣಗಳ ಹಾಗೆ ನನ್ನನ್ನು ಸುತ್ತಿಕೊಂಡರೂ ಅವರು ಮುಳ್ಳುಗಳ ಬೆಂಕಿಯ ಹಾಗೆ ಆರಿಹೋಗುತ್ತಾರೆ, ಕರ್ತನ ಹೆಸರಿನಲ್ಲಿ ನಾನು ಅವ ರನ್ನು ಸಂಹರಿಸುವೆನು.
118:13b.PSA.118.013 ನಾನು ಬೀಳುವ ಹಾಗೆ ನೀನು ನನ್ನನ್ನು ಕಠಿಣವಾಗಿ ನೂಕಿದ್ದೀ; ಆದರೆ ಕರ್ತನು ನನಗೆ ಸಹಾಯ ಮಾಡಿ ದನು.
118:14b.PSA.118.014 ನನ್ನ ಬಲವೂ ಕೀರ್ತನೆಯೂ ಕರ್ತನೇ; ಆತನೇ ನನಗೆ ರಕ್ಷಣೆಯಾದನು.
118:15b.PSA.118.015 ರಕ್ಷಣೆಯ ಉತ್ಸಾಹದ ಧ್ವನಿಯು ನೀತಿವಂತರ ಗುಡಾರಗಳಲ್ಲಿ ಅದೆ; ಕರ್ತನ ಬಲಗೈ ಪರಾಕ್ರಮವನ್ನು ನಡಿಸುತ್ತದೆ.
118:16b.PSA.118.016 ಕರ್ತನ ಬಲಗೈ ಉನ್ನತವಾಗಿದೆ; ಕರ್ತನ ಬಲಗೈ ಪರಾಕ್ರಮವನ್ನು ನಡಿಸುತ್ತದೆ.
118:17b.PSA.118.017 ನಾನು ಸಾಯದೆ ಬದುಕಿ, ಕರ್ತನ ಕಾರ್ಯಗಳನ್ನು ಪ್ರಕಟಿಸುವೆನು.
118:18b.PSA.118.018 ಕರ್ತನು ನನ್ನನ್ನು ಕಠಿಣವಾಗಿ ಶಿಕ್ಷಿಸಿದನು; ಮರಣಕ್ಕೆ ನನ್ನನ್ನು ಒಪ್ಪಿಸಲಿಲ್ಲ.
118:19b.PSA.118.019 ನೀತಿಯ ಬಾಗಲುಗಳನ್ನು ನನಗೆ ತೆರೆಯಿರಿ; ಅವುಗಳೊಳಗೆ ಪ್ರವೇಶಿಸಿ ಕರ್ತನನ್ನು ಕೊಂಡಾಡು ವೆನು.
118:20b.PSA.118.020 ಇದೇ ಕರ್ತನ ಬಾಗಲು, ನೀತಿವಂತರು ಅದರಲ್ಲಿ ಪ್ರವೇಶಿಸುವರು.
118:21b.PSA.118.021 ನಿನ್ನನ್ನು ಕೊಂಡಾಡು ವೆನು; ನನಗೆ ನೀನು ಉತ್ತರಕೊಟ್ಟು, ನನ್ನ ರಕ್ಷಣೆಯಾದಿ.
118:22b.PSA.118.022 ಮನೆ ಕಟ್ಟುವವರು ತಳ್ಳಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
118:23b.PSA.118.023 ಇದು ಕರ್ತನಿಂದುಂಟಾಗಿ ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಗಿದೆ.
118:24b.PSA.118.024 ಕರ್ತನು ಮಾಡಿದ ದಿನವು ಇದೇ; ಇದರಲ್ಲಿ ನಾವು ಉಲ್ಲಾಸಿಸಿ ಸಂತೋಷಪಡುವೆವು.
118:25b.PSA.118.025 ಓ ಕರ್ತನೇ, ರಕ್ಷಿಸಬೇಕು ಎಂದು ನಾನು ನಿನ್ನನ್ನು ಬೇಡುತ್ತೇನೆ. ಓ ಕರ್ತನೇ, ಅಭಿವೃದ್ಧಿಯನ್ನು ಕೊಡು ಎಂದು ನಿನ್ನನ್ನು ಬೇಡುತ್ತೇನೆ.
118:26b.PSA.118.026 ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದವಾಗಲಿ; ಕರ್ತನ ಆಲಯ ದೊಳಗಿಂದ ನಾವು ನಿಮ್ಮನ್ನು ಆಶೀರ್ವದಿಸಿದೆವು.
118:27b.PSA.118.027 ದೇವರು ಕರ್ತನಾಗಿದ್ದಾನೆ. ಆತನು ನಮಗೆ ಬೆಳಕನ್ನು ತೋರಿಸಿದ್ದಾನೆ. ಬಲಿ (ಪಶುವನ್ನು) ಹಗ್ಗಗಳಿಂದ ಕಟ್ಟಿ ಬಲಿಪೀಠದ ಕೊಂಬುಗಳಿಗೆ ಕಟ್ಟಿರಿ,
118:28b.PSA.118.028 ನೀನು ನನ್ನ ದೇವರಾಗಿದ್ದೀ; ನಿನ್ನನ್ನು ಕೊಂಡಾಡುವೆನು; ನನ್ನ ದೇವರೇ, ನಿನ್ನನ್ನು ಘನಪಡಿಸುವೆನು.ಕರ್ತನನ್ನು ಕೊಂಡಾಡಿರಿ; ಆತನು ಒಳ್ಳೆಯವನು. ಆತನ ಕರು ಣೆಯು ಯುಗಯುಗಕ್ಕೂ ಅದೆ.
118:29b.PSA.118.029 ಕರ್ತನನ್ನು ಕೊಂಡಾಡಿರಿ; ಆತನು ಒಳ್ಳೆಯವನು. ಆತನ ಕರು ಣೆಯು ಯುಗಯುಗಕ್ಕೂ ಅದೆ.
119
119:1b.PSA.119.001 ಮಾರ್ಗದಲ್ಲಿ ಅಶುದ್ಧರಾಗದವರೂ ಕರ್ತನ ನ್ಯಾಯಪ್ರಮಾಣದಲ್ಲಿ ನಡೆದುಕೊಳ್ಳುವವರೂ ಧನ್ಯರು.
119:2b.PSA.119.002 ಆತನ ಸಾಕ್ಷಿಗಳನ್ನು ಕೈಕೊಂಡು ಪೂರ್ಣಹೃದಯದಿಂದ ಆತನನ್ನು ಹುಡುಕುವವರು ಧನ್ಯರು.
119:3b.PSA.119.003 ನಿಶ್ಚಯವಾಗಿ ಅವರು ಅಪರಾಧ ವನ್ನು ಮಾಡದೆ ಆತನ ಮಾರ್ಗಗಳಲ್ಲಿ ನಡೆದುಕೊಳ್ಳು ತ್ತಾರೆ.
119:4b.PSA.119.004 ನಿನ್ನ ಕಟ್ಟಳೆಗಳನ್ನು ಜಾಗ್ರತೆಯಾಗಿ ಕೈಕೊಳ್ಳ ಬೇಕೆಂದು ನೀನು ಆಜ್ಞಾಪಿಸಿದ್ದೀ.
119:5b.PSA.119.005 ನನ್ನ ಮಾರ್ಗಗಳು ನಿನ್ನ ನಿಯಮಗಳನ್ನು ಕೈಕೊಳ್ಳುವದಕ್ಕೆ ನನ್ನನ್ನು ನಡಿ ಸಲಿ.
119:6b.PSA.119.006 ಆಗ ನಿನ್ನ ಆಜ್ಞೆಗಳನ್ನೆಲ್ಲಾ ದೃಷ್ಟಿಸುವಾಗ ನಾಚಿಕೆ ಪಡೆನು.
119:7b.PSA.119.007 ನಿನ್ನ ನೀತಿಯ ನ್ಯಾಯಗಳನ್ನು ನಾನು ಕಲಿ ಯುವಾಗ ಯಥಾರ್ಥ ಹೃದಯದಿಂದ ನಿನ್ನನ್ನು ಕೊಂಡಾ ಡುವೆನು.
119:8b.PSA.119.008 ನಿನ್ನ ನಿಯಮಗಳನ್ನು ಕೈಕೊಳ್ಳುವ ನನ್ನನ್ನು ಸಂಪೂರ್ಣವಾಗಿ ಕೈಬಿಡಬೇಡ.
119:9b.PSA.119.009 ಯೌವನಸ್ಥನು ಯಾವದರಿಂದ ತನ್ನ ನಡತೆಯನ್ನು ಶುಚಿಮಾಡಿಕೊಳ್ಳುವನು? ನಿನ್ನ ವಾಕ್ಯವನ್ನು ಕೈಕೊಳ್ಳು ವದರಿಂದಲೇ.
119:10b.PSA.119.010 ನನ್ನ ಪೂರ್ಣಹೃದಯದಿಂದ ನಿನ್ನನ್ನು ಹುಡುಕಿದ್ದೇನೆ; ನಿನ್ನ ಆಜ್ಞೆಗಳಿಂದ ನಾನು ತಪ್ಪಿಹೋಗ ದಂತೆ ಮಾಡು.
119:11b.PSA.119.011 ನಿನಗೆ ವಿರೋಧವಾಗಿ ಪಾಪ ಮಾಡದ ಹಾಗೆ ನನ್ನ ಹೃದಯದಲ್ಲಿ ನಿನ್ನ ವಾಕ್ಯವನ್ನು ಬಚ್ಚಿಟ್ಟಿದ್ದೇನೆ.
119:12b.PSA.119.012 ಓ ಕರ್ತನೇ, ನೀನು ಸ್ತುತಿಸಲ್ಪಡು ವಾತನು; ನಿನ್ನ ನಿಯಮಗಳನ್ನು ನನಗೆ ಕಲಿಸು.
119:13b.PSA.119.013 ನನ್ನ ತುಟಿಗಳಿಂದ ನಿನ್ನ ನ್ಯಾಯವಿಧಿಗಳನ್ನೆಲ್ಲಾ ಸಾರಿದ್ದೇನೆ.
119:14b.PSA.119.014 ನಿನ್ನ ಸಾಕ್ಷಿಗಳ ಮಾರ್ಗದಲ್ಲಿ, ಸಕಲ ಸಂಪತ್ತಿನಲ್ಲಿ ಹೇಗೋ ಹಾಗೆಯೇ ಸಂತೋಷಿಸಿದ್ದೇನೆ.
119:15b.PSA.119.015 ನಿನ್ನ ಕಟ್ಟಳೆಗಳನ್ನು ಧ್ಯಾನ ಮಾಡಿ, ನಿನ್ನ ದಾರಿಗಳನ್ನು ಗಮ ನಿಸುವೆನು.
119:16b.PSA.119.016 ನಿನ್ನ ನಿಯಮಗಳಲ್ಲಿ ಆನಂದಪಟ್ಟು, ನಿನ್ನ ವಾಕ್ಯವನ್ನು ಮರೆತುಬಿಡೆನು.
119:17b.PSA.119.017 ನಿನ್ನ ಸೇವಕನಿಗೆ ಉಪಕಾರಮಾಡು; ಆಗ ನಾನು ಬದುಕಿ, ನಿನ್ನ ವಾಕ್ಯವನ್ನು ಕೈಕೊಳ್ಳುವೆನು.
119:18b.PSA.119.018 ನನ್ನ ಕಣ್ಣುಗಳನ್ನು ತೆರೆ; ಆಗ ನಿನ್ನ ನ್ಯಾಯಪ್ರಮಾಣದಲ್ಲಿನ ಅದ್ಭುತಗಳನ್ನು ನೋಡುವೆನು.
119:19b.PSA.119.019 ನಾನು ಭೂಮಿಯಲ್ಲಿ ಪರದೇಶಸ್ಥನಾಗಿದ್ದೇನೆ; ನಿನ್ನ ಆಜ್ಞೆ ಗಳನ್ನು ನನಗೆ ಮರೆಮಾಡಬೇಡ.
119:20b.PSA.119.020 ನಿನ್ನ ನ್ಯಾಯ ವಿಧಿಗಳಿಗಾಗಿ ನನ್ನಲ್ಲಿರುವ ಅಭಿಲಾಷೆಯ ನಿಮಿತ್ತ ನನ್ನ ಪ್ರಾಣವು ಜಜ್ಜಿಹೋಗಿದೆ
119:21b.PSA.119.021 ನಿನ್ನ ಆಜ್ಞೆಗಳಿಂದ ತಪ್ಪಿಹೋಗುವ ಶಾಪಗ್ರಸ್ಥರಾದ ಅಹಂಕಾರಿಗಳನ್ನು ನೀನು ಗದರಿಸಿದ್ದೀ.
119:22b.PSA.119.022 ನಾನು ನಿನ್ನ ಸಾಕ್ಷಿಗಳನ್ನು ಕೈಕೊಂಡ ಕಾರಣ ನಿಂದೆಯನ್ನೂ ತಿರಸ್ಕಾರವನ್ನೂ ನನಗೆ ದೂರಮಾಡಿಬಿಡು.
119:23b.PSA.119.023 ಪ್ರಧಾನರು ಕೂತುಕೊಂಡು ನನಗೆ ವಿರೋಧವಾಗಿ ಮಾತಾಡಿಕೊಂಡರೂ ನಿನ್ನ ಸೇವಕನು ನಿನ್ನ ನಿಯಮಗಳನ್ನು ಧ್ಯಾನಮಾಡುವನು.
119:24b.PSA.119.024 ನಿನ್ನ ಸಾಕ್ಷಿಗಳೇ ನನ್ನ ಆನಂದವೂ ಆಲೋಚನಾ ಕರ್ತರೂ ಆಗಿವೆ.
119:25b.PSA.119.025 ನನ್ನ ಪ್ರಾಣವು ಧೂಳಿಗೆ ಹತ್ತಿ ಕೊಳ್ಳುತ್ತದೆ; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಉಜ್ಜೀ ವಿಸು.
119:26b.PSA.119.026 ನಾನು ನಿನ್ನ ಮಾರ್ಗಗಳನ್ನು ಸಾರಲು, ನನಗೆ ಉತ್ತರಕೊಟ್ಟೆ; ನಿನ್ನ ನಿಯಮಗಳನ್ನು ನನಗೆ ಕಲಿಸು.
119:27b.PSA.119.027 ನಿನ್ನ ಕಟ್ಟಳೆಗಳ ಮಾರ್ಗವನ್ನು ನಾನು ಗ್ರಹಿಸಮಾಡು; ಆಗ ನಿನ್ನ ಅದ್ಭುತಗಳ ವಿಷಯವಾಗಿ ಮಾತನಾಡುವೆನು.
119:28b.PSA.119.028 ನನ್ನ ಪ್ರಾಣವು ಭಾರದಿಂದ ಕರಗಿಹೋಗುತ್ತದೆ; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಸ್ಥಿರಮಾಡು;
119:29b.PSA.119.029 ಸುಳ್ಳು ಮಾರ್ಗವನ್ನು ನನ್ನಿಂದ ತೊಲ ಗಿಸು. ನಿನ್ನ ನ್ಯಾಯಪ್ರಮಾಣವನ್ನು ನನಗೆ ಕೃಪೆಯಿಂದ ಅನುಗ್ರಹಿಸು.
119:30b.PSA.119.030 ಸತ್ಯದ ಮಾರ್ಗವನ್ನು ಆದು ಕೊಂಡಿದ್ದೇನೆ; ನಿನ್ನ ನ್ಯಾಯವಿಧಿಗಳನ್ನು ಮುಂದಿಟ್ಟು ಕೊಂಡಿದ್ದೇನೆ;
119:31b.PSA.119.031 ನಿನ್ನ ಸಾಕ್ಷಿಗಳಿಗೆ ಹತ್ತಿಕೊಂಡಿದ್ದೇನೆ; ಓ ಕರ್ತನೇ, ನನ್ನನ್ನು ನಾಚಿಕೆಪಡಿಸಬೇಡ.
119:32b.PSA.119.032 ನಿನ್ನ ಆಜ್ಞೆಗಳ ಮಾರ್ಗದಲ್ಲಿ ಓಡುವೆನು; ನೀನು ನನ್ನ ಹೃದಯವನ್ನು ವಿಶಾಲಮಾಡುತ್ತೀ.
119:33b.PSA.119.033 ಓ ಕರ್ತನೇ, ನಿನ್ನ ನಿಯಮಗಳ ಮಾರ್ಗವನ್ನು ನನಗೆ ಬೋಧಿಸು; ಅದನ್ನು ಕಡೇ ವರೆಗೂ ಕೈ ಕೊಳ್ಳುವೆನು.
119:34b.PSA.119.034 ನನಗೆ ಗ್ರಹಿಕೆಯನ್ನು ಕೊಡು; ಆಗ ನಿನ್ನ ನ್ಯಾಯಪ್ರಮಾಣವನ್ನು ಕೈಕೊಂಡು ಹೌದು, ಪೂರ್ಣಹೃದಯದಿಂದ ಅದನ್ನು ಕೈಕೊಳ್ಳುವೆನು.
119:35b.PSA.119.035 ನಿನ್ನ ಆಜ್ಞೆಗಳ ದಾರಿಯಲ್ಲಿ ನನ್ನನ್ನು ನಡೆಯಮಾಡು; ಅದ ರಲ್ಲಿ ಸಂತೋಷಿಸುತ್ತೇನೆ.
119:36b.PSA.119.036 ಲೋಭದ ಕಡೆಗಲ್ಲ, ನಿನ್ನ ಸಾಕ್ಷಿಗಳ ಕಡೆಗೆ ನನ್ನ ಹೃದಯವನ್ನು ತಿರುಗಿಸು.
119:37b.PSA.119.037 ವ್ಯರ್ಥತೆಯನ್ನು ನೋಡದ ಹಾಗೆ ನನ್ನ ಕಣ್ಣುಗಳನ್ನು ತೊಲಗಿಸು; ನಿನ್ನ ಮಾರ್ಗಗಳಲ್ಲಿ ನನ್ನನ್ನು ಚೈತನ್ಯ ಪಡಿಸು.
119:38b.PSA.119.038 ನಿನ್ನಲ್ಲಿ ಭಯಭಕ್ತಿಯುಳ್ಳ ಸೇವಕನಿಗೆ ವಾಕ್ಯವನ್ನು ನೇರವೇರಿಸು,
119:39b.PSA.119.039 ನನಗೆ ಭಯಪಡಿಸುವ ಅವಮಾನದಿಂದ ನನ್ನನ್ನು ತೊಲಗಿಸು;
119:40b.PSA.119.040 ನಿನ್ನ ಕಟ್ಟಳೆ ಗಳನ್ನು ಬಯಸುವ ನನ್ನನ್ನು ನಿನ್ನ ನೀತಿಯಿಂದ ಚೈತನ್ಯಪಡಿಸು.
119:41b.PSA.119.041 ಕರ್ತನೇ, ನಿನ್ನ ವಾಕ್ಯದ ಪ್ರಕಾರ ನಿನ್ನ ಕರು ಣೆಯೂ ರಕ್ಷಣೆಯೂ ನನಗೆ ದೊರಕಲಿ.
119:42b.PSA.119.042 ಆಗ ನನ್ನನ್ನು ನಿಂದಿಸುವವನಿಗೆ ಉತ್ತರ ಕೊಡುವೆನು; ನಿನ್ನ ವಾಕ್ಯದಲ್ಲಿ ಭರವಸವಿಟ್ಟದ್ದೇನೆ.
119:43b.PSA.119.043 ಸತ್ಯದ ವಾಕ್ಯವನ್ನು ನನ್ನ ಬಾಯಿಂದ ಪೂರ್ಣವಾಗಿ ತೆಗೆದುಹಾಕಬೇಡ; ನಿನ್ನ ನ್ಯಾಯವಿಧಿಗಳನ್ನು ನಿರೀಕ್ಷಿಸಿದ್ದೇನೆ,
119:44b.PSA.119.044 ನಿನ್ನ ನ್ಯಾಯಪ್ರಮಾಣವನ್ನು ಸತತವಾಗಿ ಎಂದೆಂದಿಗೂ ಕೈಕೊಳ್ಳುವೆನು.
119:45b.PSA.119.045 ಸ್ವತಂತ್ರದಲ್ಲಿ ನಡೆದುಕೊಳ್ಳುವೆನು; ನಿನ್ನ ಕಟ್ಟಳೆಗಳನ್ನು ನಾನು ಹುಡುಕುತ್ತೇನೆ.
119:46b.PSA.119.046 ನಿನ್ನ ಸಾಕ್ಷಿಗಳನ್ನು ಕುರಿತು ಅರಸರ ಮುಂದೆ ಮಾತನಾಡು ತ್ತೇನೆ, ನಾಚಿಕೆಪಡುವದಿಲ್ಲ.
119:47b.PSA.119.047 ನಾನು ಪ್ರೀತಿಮಾಡುವ ನಿನ್ನ ಆಜ್ಞೆಗಳಲ್ಲಿ ಆನಂದಪಡುವೆನು.
119:48b.PSA.119.048 ನಾನು ಪ್ರೀತಿ ಮಾಡುವ ನಿನ್ನ ಆಜ್ಞೆಗಳ ಕಡೆಗೆ ನನ್ನ ಕೈಗಳನ್ನೆತ್ತಿ, ನಿನ್ನ ನಿಯಮಗಳನ್ನು ಧ್ಯಾನ ಮಾಡುವೆನು.
119:49b.PSA.119.049 ನಾನು ನಿರೀಕ್ಷಿಸುವಂತೆ ಮಾಡಿದ ನಿನ್ನ ವಾಕ್ಯವನ್ನು ನಿನ್ನ ಸೇವಕನಿಗೋಸ್ಕರ ನೀನು ಜ್ಞಾಪಕಮಾಡಿಕೋ,
119:50b.PSA.119.050 ನನ್ನ ಸಂಕಷ್ಟದಲ್ಲಿ ಇದೇ ನನ್ನ ಆದರಣೆಯು; ಯಾಕಂದರೆ ನಿನ್ನ ವಾಕ್ಯವು ನನ್ನನ್ನು ಬದುಕಿಸಿತು.
119:51b.PSA.119.051 ಅಹಂಕಾರಿಗಳು ಬಹಳವಾಗಿ ನನ್ನನ್ನು ಹಾಸ್ಯ ಮಾಡಿ ದರೂ ನಿನ್ನ ನ್ಯಾಯಪ್ರಮಾಣದಿಂದ ನಾನು ತೊಲ ಗಲಿಲ್ಲ.
119:52b.PSA.119.052 ಓ ಕರ್ತನೇ, ಪೂರ್ವಕಾಲದಿಂದ ಬಂದಿ ರುವ ನಿನ್ನ ನ್ಯಾಯಗಳನ್ನು ಜ್ಞಾಪಕಮಾಡಿಕೊಂಡು ಆದರಣೆ ಹೊಂದಿದ್ದೇನೆ.
119:53b.PSA.119.053 ನಿನ್ನ ನ್ಯಾಯಪ್ರಮಾಣ ವನ್ನು ಬಿಟ್ಟುಬಿಡುವ ದುಷ್ಟರ ನಿಮಿತ್ತ ಭಯ ಭ್ರಾಂತಿಯು ನನ್ನನ್ನು ಹಿಡಿದುಕೊಂಡಿತು.
119:54b.PSA.119.054 ನನ್ನ ಪ್ರವಾಸದ ಮನೆಯಲ್ಲಿ ನಿನ್ನ ನಿಯಮಗಳು ನನಗೆ ಕೀರ್ತನೆಗಳಾಗಿವೆ.
119:55b.PSA.119.055 ಓ ಕರ್ತನೇ, ರಾತ್ರಿಯಲ್ಲಿ ನಿನ್ನ ಹೆಸರನ್ನು ಜ್ಞಾಪಕಮಾಡಿಕೊಂಡಿದ್ದೇನೆ, ನಿನ್ನ ನ್ಯಾಯ ಪ್ರಮಾಣವನ್ನು ಕೈಕೊಂಡಿದ್ದೇನೆ.
119:56b.PSA.119.056 ನಿನ್ನ ಕಟ್ಟಳೆಗಳನ್ನು ಕೈಕೊಳ್ಳಲು ನನಗೆ ಅನುಗ್ರಹವಾಯಿತು.
119:57b.PSA.119.057 ಕರ್ತನೇ ನನ್ನ ಪಾಲು; ನಿನ್ನ ವಾಕ್ಯಗಳನ್ನು ಕೈಕೊಳ್ಳುವೆನೆಂದು ಹೇಳಿದೆನು.
119:58b.PSA.119.058 ಪೂರ್ಣಹೃದಯ ದಿಂದ ನಿನ್ನನ್ನು ಬೇಡಿಕೊಂಡಿದ್ದೇನೆ; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಕರುಣಿಸು.
119:59b.PSA.119.059 ನನ್ನ ಮಾರ್ಗಗಳನ್ನು ಯೋಚಿಸಿಕೊಂಡು ನಿನ್ನ ಸಾಕ್ಷಿಗಳ ಕಡೆಗೆ ನನ್ನ ಪಾದ ಗಳನ್ನು ತಿರುಗಿಸಿದ್ದೇನೆ.
119:60b.PSA.119.060 ನಿನ್ನ ಆಜ್ಞೆಗಳನ್ನು ಕೈಕೊಳ್ಳು ವದಕ್ಕೆ ತಡಮಾಡದೆ ತ್ವರೆಪಟ್ಟಿದ್ದೇನೆ.
119:61b.PSA.119.061 ದುಷ್ಟರ ಪಾಶಗಳು ನನ್ನನ್ನು ಸುತ್ತಿಕೊಂಡವು; ಆದರೂ ನಿನ್ನ ನ್ಯಾಯಪ್ರಮಾಣವನ್ನು ನಾನು ಮರೆತುಬಿಡಲಿಲ್ಲ.
119:62b.PSA.119.062 ನಿನ್ನ ನೀತಿಯ ನ್ಯಾಯವಿಧಿಗಳಿಗೋಸ್ಕರ ನಿನ್ನನ್ನು ಕೊಂಡಾಡುವದಕ್ಕೆ ಮಧ್ಯರಾತ್ರಿಯಲ್ಲಿ ಏಳುತ್ತೇನೆ.
119:63b.PSA.119.063 ನಿನಗೆ ಭಯಪಡುವವರೆಲ್ಲರಿಗೂ ನಿನ್ನ ಕಟ್ಟಳೆಗ ಳನ್ನು ಕೈಕೊಳ್ಳುವವರಿಗೂ, ನಾನು ಸಂಗಡಿಗನಾಗಿದ್ದೇನೆ.
119:64b.PSA.119.064 ಕರ್ತನೇ, ಭೂಮಿಯು ನಿನ್ನ ಕರುಣೆಯಿಂದ ತುಂಬಿದೆ; ನಿನ್ನ ನಿಯಮಗಳನ್ನು ನನಗೆ ಕಲಿಸು.
119:65b.PSA.119.065 ಓ ಕರ್ತನೇ, ನಿನ್ನ ವಾಕ್ಯದ ಪ್ರಕಾರ ನಿನ್ನ ಸೇವಕ ನಿಗೆ ಒಳ್ಳೇದನ್ನು ಮಾಡಿದ್ದೀ.
119:66b.PSA.119.066 ಒಳ್ಳೆಯ ವಿವೇಚನೆ ಯನ್ನೂ ತಿಳುವಳಿಕೆಗಳನ್ನೂ ನನಗೆ ಕಲಿಸು; ನಿನ್ನ ಆಜ್ಞೆಗಳಲ್ಲಿ ನಂಬಿಕೆ ಇಟ್ಟಿದ್ದೇನೆ.
119:67b.PSA.119.067 ನಾನು ಶ್ರಮೆಪಡು ವದಕ್ಕಿಂತ ಮುಂಚೆ ತಪ್ಪಿಹೋಗುತ್ತಿದ್ದೆನು; ಆದರೆ ಈಗ ನಿನ್ನ ವಾಕ್ಯವನ್ನು ಕೈಕೊಂಡಿದ್ದೇನೆ.
119:68b.PSA.119.068 ನೀನು ಒಳ್ಳೆಯ ವನೂ ಒಳ್ಳೇದನ್ನು ಮಾಡುವವನೂ ಆಗಿದ್ದೀ; ನಿನ್ನ ನಿಯಮಗಳನ್ನು ನನಗೆ ಬೋಧಿಸು.
119:69b.PSA.119.069 ಅಹಂಕಾರಿ ಗಳು ನನಗೆ ವಿರೋಧವಾಗಿ ಸುಳ್ಳು ಕಲ್ಪಿಸಿದರು; ನಾನು ಪೂರ್ಣಹೃದಯದಿಂದ ನಿನ್ನ ಕಟ್ಟಳೆಗಳನ್ನು ಕೈಕೊಳ್ಳುವೆನು.
119:70b.PSA.119.070 ಅವರ ಹೃದಯವು ಕೊಬ್ಬಿನ ಹಾಗೆ ಮಂದವಾಗಿದೆ; ನಾನು ನಿನ್ನ ನ್ಯಾಯಪ್ರಮಾಣದಲ್ಲಿ ಆನಂದಪಡುತ್ತೇನೆ.
119:71b.PSA.119.071 ನಿನ್ನ ನಿಯಮಗಳನ್ನು ಕಲಿಯುವ ಹಾಗೆ ನಾನು ಶ್ರಮೆಪಟ್ಟದ್ದು ನನಗೆ ಒಳ್ಳೇದು.
119:72b.PSA.119.072 ಸಾವಿ ರಾರು ಬೆಳ್ಳಿಬಂಗಾರಗಳಿಗಿಂತ ನಿನ್ನ ಬಾಯಿಯ ನ್ಯಾಯ ಪ್ರಮಾಣವು ನನಗೆ ಒಳ್ಳೇದು.
119:73b.PSA.119.073 ನಿನ್ನ ಕೈಗಳು ನನ್ನನ್ನು ರೂಪಿಸಿ ನಿರ್ಮಿಸಿದವು; ನಿನ್ನ ಆಜ್ಞೆಗಳನ್ನು ಕಲಿತುಕೊಳ್ಳುವ ಹಾಗೆ ಗ್ರಹಿಕೆಯನ್ನು ನನಗೆ ಕೊಡು.
119:74b.PSA.119.074 ನಿನಗೆ ಭಯಪಡುವವರು ನನ್ನನ್ನು ನೋಡಿ ಸಂತೋಷಪಡುವರು; ನಿನ್ನ ವಾಕ್ಯವನ್ನು ಎದುರುನೋಡುತ್ತೇನೆ.
119:75b.PSA.119.075 ಕರ್ತನೇ, ನಿನ್ನ ನ್ಯಾಯ ವಿಧಿಗಳು ನೀತಿಯುಳ್ಳವುಗಳೆಂದೂ ನಂಬಿಕೆಯಿಂದಲೇ ನೀನು ನನ್ನನ್ನು ಶ್ರಮೆಪಡಿಸಿದ್ದೀ ಎಂದು ಬಲ್ಲೆನು.
119:76b.PSA.119.076 ನಿನ್ನ ಸೇವಕನಿಗೆ ನೀನು ಹೇಳಿದ ಮಾತಿನ ಪ್ರಕಾರ ನನ್ನನ್ನು ಆದರಿಸುವದಕ್ಕೆ ನಿನ್ನ ದಯಾಪೂರ್ಣ ಕರುಣೆ ಇರಲಿ.
119:77b.PSA.119.077 ನಿನ್ನ ಅಂತಃಕರಣವು ನನಗೆ ಬರಲಿ; ಆಗ ನಾನು ಬದುಕುವೆನು; ನಿನ್ನ ನ್ಯಾಯಪ್ರಮಾಣವು ನನ್ನ ಆನಂದವಾಗಿದೆ.
119:78b.PSA.119.078 ಕಾರಣವಿಲ್ಲದೆ ನನಗೆ ಕೇಡು ಮಾಡಿದ ಕಾರಣ ಅಹಂಕಾರಿಗಳು ನಾಚಿಕೆಪಡಲಿ, ನಾನು ನಿನ್ನ ಕಟ್ಟಳೆಗಳನ್ನು ಧ್ಯಾನ ಮಾಡುವೆನು.
119:79b.PSA.119.079 ನಿನಗೆ ಭಯಪಟ್ಟು ನಿನ್ನ ಸಾಕ್ಷಿಗಳನ್ನು ಬಲ್ಲವರು ನನ್ನ ಕಡೆಗೆ ತಿರುಗಲಿ.
119:80b.PSA.119.080 ನಾನು ನಾಚಿಕೆಪಡದ ಹಾಗೆ ನನ್ನ ಹೃದಯವು ನಿನ್ನ ನಿಯಮಗಳಲ್ಲಿ ಸಂಪೂರ್ಣವಾಗಿರಲಿ.
119:81b.PSA.119.081 ನನ್ನ ಪ್ರಾಣವು ನಿನ್ನ ರಕ್ಷಣೆಗಾಗಿ ಕುಗ್ಗಿ ಹೋಗುತ್ತದೆ; ನಿನ್ನ ವಾಕ್ಯದಲ್ಲಿ ನಿರೀಕ್ಷೆ ಇಟ್ಟಿದ್ದೇನೆ.
119:82b.PSA.119.082 ಯಾವಾಗ ನನ್ನನ್ನು ಆದರಿಸುವಿ ಎಂದು ನನ್ನ ಕಣ್ಣು ಗಳು ನಿನ್ನ ಮಾತಿಗೆ ಮಂದವಾಗುತ್ತವೆ.
119:83b.PSA.119.083 ನಾನು ಹೊಗೆಯಲ್ಲಿರುವ ಬುದ್ಧಲಿಯ ಹಾಗೆ ಇದ್ದರೂ ನಿನ್ನ ನಿಯಮಗಳನ್ನು ನಾನು ಮರೆತುಬಿಡಲಿಲ್ಲ.
119:84b.PSA.119.084 ನಿನ್ನ ಸೇವಕನ ದಿವಸಗಳು ಎಷ್ಟು? ನನ್ನನ್ನು ಹಿಂಸಿಸುವವರಿಗೆ ಯಾವಾಗ ನ್ಯಾಯ ತೀರಿಸುವಿ?
119:85b.PSA.119.085 ನಿನ್ನ ನ್ಯಾಯ ಪ್ರಮಾಣದ ಪ್ರಕಾರವಾಗಿರದ ಅಹಂಕಾರಿಗಳು ನನಗೆ ಕುಣಿಗಳನ್ನು ಅಗೆದಿದ್ದಾರೆ.
119:86b.PSA.119.086 ನಿನ್ನ ಆಜ್ಞೆಗಳೆಲ್ಲಾ ನಂಬಿ ಕೆಯುಳ್ಳವುಗಳು; ನನ್ನನ್ನು ಅನ್ಯಾಯವಾಗಿ ಹಿಂಸಿ ಸುತ್ತಾರೆ. ನನಗೆ ಸಹಾಯಮಾಡು.
119:87b.PSA.119.087 ಅವರು ನನ್ನನ್ನು ಬಹಳ ಮಟ್ಟಿಗೆ ಭೂಮಿಯಲ್ಲಿ ಸಂಹರಿಸುವದಕ್ಕಿದ್ದರು. ಆದರೆ ನಾನು ನಿನ್ನ ಕಟ್ಟಳೆಗಳನ್ನು ಬಿಡಲಿಲ್ಲ.
119:88b.PSA.119.088 ನಿನ್ನ ಪ್ರೀತಿ ಕರುಣೆಯ ಪ್ರಕಾರ ನನ್ನನ್ನು ಬದುಕಿಸು; ಆಗ ನಿನ್ನ ಬಾಯಿಯ ಸಾಕ್ಷಿಯನ್ನು ಕೈಕೊಳ್ಳುವೆನು.
119:89b.PSA.119.089 ಓ ಕರ್ತನೇ, ಎಂದೆಂದಿಗೂ ನಿನ್ನ ವಾಕ್ಯವು ಪರಲೋಕದಲ್ಲಿ ಸ್ಥಿರವಾಗಿದೆ.
119:90b.PSA.119.090 ತಲತಲಾಂತರಕ್ಕೂ ನಿನ್ನ ನಂಬಿಗಸ್ತಿಕೆಯು ಇರುವದು; ನೀನು ಭೂಮಿ ಯನ್ನು ಸ್ಥಾಪಿಸಿದಿ; ಅದು ನೆಲೆಯಾಗಿದೆ.
119:91b.PSA.119.091 ಇಂದಿನ ವರೆಗೆ ನಿನ್ನ್ನ ನಿರ್ಣಯಗಳು ನಿಲ್ಲುತ್ತವೆ; ಯಾಕಂದರೆ ಸರ್ವವೂ ನಿನ್ನನ್ನು ಸೇವಿಸುತ್ತದೆ.
119:92b.PSA.119.092 ನಿನ್ನ ನ್ಯಾಯ ಪ್ರಮಾಣವು ನನಗೆ ಆನಂದವಾಗಿರದಿದ್ದರೆ ನಾನು ನನ್ನ ಸಂಕಟದಲ್ಲಿ ನಾಶವಾಗುತ್ತಿದ್ದೆನು.
119:93b.PSA.119.093 ಎಂದೆಂದಿಗೂ ನಿನ್ನ ಕಟ್ಟಳೆಗಳನ್ನು ಮರೆತುಬಿಡೆನು; ಯಾಕಂದರೆ ಅವುಗಳಿಂದ ನನ್ನನ್ನು ಬದುಕಿಸಿದ್ದೀ.
119:94b.PSA.119.094 ನಾನು ನಿನ್ನ ವನೇ, ನನ್ನನ್ನು ರಕ್ಷಿಸು; ನಿನ್ನ ಕಟ್ಟಳೆಗಳನ್ನು ಹುಡುಕಿ ದ್ದೇನೆ.
119:95b.PSA.119.095 ದುಷ್ಟರು ನನ್ನನ್ನು ನಾಶಮಾಡುವದಕ್ಕೆ ನನಗಾಗಿ ಕಾದುಕೊಳ್ಳುತ್ತಾರೆ. ನಿನ್ನ ಸಾಕ್ಷಿಗಳನ್ನು ಗ್ರಹಿಸಿ ಕೊಳ್ಳುತ್ತೇನೆ.
119:96b.PSA.119.096 ಎಲ್ಲಾ ಸಂಪೂರ್ಣತೆಯ ಮೇರೆ ಯನ್ನು ನೋಡಿದ್ದೇನೆ; ಆದರೆ ನಿನ್ನ ಆಜ್ಞೆಯು ಬಹಳ ವಿಸ್ತಾರವಾಗಿದೆ.
119:97b.PSA.119.097 ನಿನ್ನ ನ್ಯಾಯಪ್ರಮಾಣವನ್ನು ನಾನು ಎಷ್ಟೋ ಪ್ರೀತಿ ಮಾಡುತ್ತೇನೆ, ದಿನವೆಲ್ಲಾ ಅದೇ ನನ್ನ ಧ್ಯಾನವು.
119:98b.PSA.119.098 ನಿನ್ನ ಆಜ್ಞೆಗಳ ಮೂಲಕ ನನ್ನ ಶತ್ರುಗಳಿಗಿಂತ ನನ್ನನ್ನು ಜ್ಞಾನಿಯಾಗಿ ಮಾಡಿದ್ದೀ; ಅವು ಎಂದೆಂದಿಗೂ ನನ್ನಲ್ಲಿ ಅವೆ.
119:99b.PSA.119.099 ನನ್ನ ಬೋಧಕರೆಲ್ಲರಿಗಿಂತ ನಾನು ಬುದ್ಧಿವಂತ ನಾಗಿದ್ದೇನೆ; ನಿನ್ನ ಸಾಕ್ಷಿಗಳು ನನ್ನ ಧ್ಯಾನವಾಗಿವೆ.
119:100b.PSA.119.100 ನಾನು ಪೂರ್ವಿಕರಿಗಿಂತ ವಿವೇಕಿಯಾಗಿದ್ದೇನೆ; ನಿನ್ನ ಕಟ್ಟಳೆಗಳನ್ನು ಕೈಕೊಂಡಿದ್ದೇನೆ.
119:101b.PSA.119.101 ನಿನ್ನ ವಾಕ್ಯವನ್ನು ಕೈಕೊಳ್ಳುವ ಹಾಗೆ ಎಲ್ಲಾ ಕೆಟ್ಟದಾರಿಗಳಿಂದ ನನ್ನ ಪಾದ ಗಳನ್ನು ಹಿಂದೆಗೆದ್ದಿದ್ದೇನೆ.
119:102b.PSA.119.102 ನಿನ್ನ ನ್ಯಾಯವಿಧಿಗಳಿಂದ ನಾನು ತೊಲಗಲಿಲ್ಲ; ನೀನು ನನ್ನನ್ನು ಬೋಧಿಸಿದ್ದೀ.
119:103b.PSA.119.103 ನಿನ್ನ ಮಾತುಗಳು ನನ್ನ ರುಚಿಗೆ ಎಷ್ಟೋ ಸಿಹಿ ಯಾಗಿವೆ, ಅವು ನನ್ನ ಬಾಯಿಗೆ ಜೇನಿಗಿಂತ ಸಿಹಿ ಯಾಗಿವೆ.
119:104b.PSA.119.104 ನಾನು ನಿನ್ನ ಕಟ್ಟಳೆಗಳಿಂದ ವಿವೇಕಿ ಯಾಗಿದ್ದೇನೆ. ಆದದರಿಂದ ಮೋಸದ ಮಾರ್ಗಗ ಳನ್ನೆಲ್ಲಾ ಹಗೆಮಾಡಿದ್ದೇನೆ.
119:105b.PSA.119.105 ನಿನ್ನ ವಾಕ್ಯವು ನನ್ನ ಪಾದಕ್ಕೆ ದೀಪವೂ ನನ್ನ ದಾರಿಗೆ ಬೆಳಕೂ ಆಗಿದೆ.
119:106b.PSA.119.106 ನಿನ್ನ ನೀತಿ ವಿಧಿಗಳನ್ನು ಅನುಸರಿಸುವೆನೆಂದು ಪ್ರಮಾಣ ಮಾಡಿದ್ದೇನೆ; ಅದನ್ನು ಈಡೇರಿಸುವೆನು.
119:107b.PSA.119.107 ಬಹಳವಾಗಿ ಶ್ರಮೆಪಟ್ಟಿದ್ದೇನೆ; ಕರ್ತನೇ, ನಿನ್ನ ವಾಕ್ಯಾನುಸಾರ ನನ್ನನ್ನು ಉಜ್ಜೀವಿಸು.
119:108b.PSA.119.108 ಕರ್ತನೇ, ನನ್ನ ಮನಃಪೂರ್ವಕವಾದ ಸ್ತುತಿ ಸಮರ್ಪಣೆಗಳನ್ನು ದಯವಿಟ್ಟು ಅಂಗೀಕರಿಸು. ನಿನ್ನ ವಿಧಿಗಳನ್ನು ನನಗೆ ಬೋಧಿಸು.
119:109b.PSA.119.109 ನನ್ನ ಪ್ರಾಣವು ಯಾವಾಗಲೂ ನನ್ನ ಕೈಯಲ್ಲಿ ಅದೆ; ಆದಾಗ್ಯೂ ನಿನ್ನ ನ್ಯಾಯಪ್ರಮಾಣವನ್ನು ಮರೆತುಬಿಡೆನು.
119:110b.PSA.119.110 ದುಷ್ಟರು ನನಗೆ ಉರ್ಲು ಒಡ್ಡಿದ್ದಾರೆ. ಆದರೂ ನಾನು ನಿನ್ನ ಕಟ್ಟಳೆಗಳನ್ನು ಬಿಟ್ಟು ತಪ್ಪಿಹೋಗಲಿಲ್ಲ.
119:111b.PSA.119.111 ನಿನ್ನ ಸಾಕ್ಷಿಗಳನ್ನು ನಿತ್ಯಸ್ವಾಸ್ತ್ಯವಾಗಿ ತೆಗೆದುಕೊಂಡಿದ್ದೇನೆ; ಅವು ನನ್ನ ಹೃದಯಕ್ಕೆ ಆನಂದವಾಗಿವೆ.
119:112b.PSA.119.112 ನಿನ್ನ ನಿಯಮಗಳನ್ನು ಕಡೇ ವರೆಗೂ ಈಡೇರಿಸುವದಕ್ಕೆ ನಾನು ಮನಸ್ಸು ಮಾಡಿದ್ದೇನೆ.
119:113b.PSA.119.113 ನಾನು ಚಂಚಲ ರನ್ನು ಹಗೆಮಾಡುತ್ತೇನೆ; ಆದರೆ ನಿನ್ನ ನ್ಯಾಯಪ್ರಮಾಣ ವನ್ನು ಪ್ರೀತಿಮಾಡುತ್ತೇನೆ.
119:114b.PSA.119.114 ನನ್ನ ಆಶ್ರಯವೂ ಗುರಾಣಿಯೂ ನೀನೇ; ನಿನ್ನ ವಾಕ್ಯದಲ್ಲಿಯೇ ನಿರೀಕ್ಷೆ ಯಿಟ್ಟಿದ್ದೇನೆ.
119:115b.PSA.119.115 ಕೇಡು ಮಾಡುವವರೇ, ನನ್ನಿಂದ ತೊಲಗಿರಿ; ನನ್ನ ದೇವರ ಆಜ್ಞೆಗಳನ್ನು ಕೈಕೊಳ್ಳುವೆನು.
119:116b.PSA.119.116 ನಿನ್ನ ವಾಕ್ಯಾನುಸಾರವಾಗಿ ನನ್ನನ್ನು ಎತ್ತಿಹಿಡಿ; ಆಗ ಬದುಕುವೆನು; ನನ್ನ ನಿರೀಕ್ಷೆಯ ನಿಮಿತ್ತ ನನ್ನನ್ನು ನಾಚಿಕೆಪಡಿಸಬೇಡ.
119:117b.PSA.119.117 ನನ್ನನ್ನು ನೀನು ಹಿಡಿ; ಆಗ ನಾನು ಸುರಕ್ಷಿತನಾಗಿದ್ದು ನಿನ್ನ ನಿಯಮಗಳನ್ನು ಯಾವಾ ಗಲೂ ಗೌರವಿಸುವೆನು.
119:118b.PSA.119.118 ನಿನ್ನ ನಿಯಮಗಳಿಂದ ತಪ್ಪಿದವರೆಲ್ಲರನ್ನು ನೀನು ತುಳಿದುಬಿಟ್ಟಿದ್ದೀ; ಅವರಲ್ಲಿ ಮೋಸವೂ ಸುಳ್ಳೂ ಇತ್ತು.
119:119b.PSA.119.119 ಕಿಟ್ಟದ ಹಾಗೆ ಭೂಮಿ ಯಲ್ಲಿರುವ ದುಷ್ಟರೆಲ್ಲರನ್ನು ತೆಗೆದುಹಾಕುತ್ತೀ, ಆದದ ರಿಂದ ನಿನ್ನ ವಿಧಿಗಳನ್ನು ಪ್ರೀತಿ ಮಾಡುತ್ತೇನೆ.
119:120b.PSA.119.120 ನಿನ್ನ ಹೆದರಿಕೆಯಿಂದ ನನ್ನ ಶರೀರವು ನಡುಗುತ್ತದೆ. ನಾನು ನಿನ್ನ ತೀರ್ಪುಗಳಿಗೆ ಭಯಪಡುತ್ತೇನೆ.
119:121b.PSA.119.121 ನ್ಯಾಯವನ್ನೂ ನೀತಿಯನ್ನೂ ಮಾಡಿದ್ದೇನೆ;ನನ್ನ ಹಿಂಸಕರಿಗೆ ನನ್ನನ್ನು ಒಪ್ಪಿಸಿಬಿಡಬೇಡ.
119:122b.PSA.119.122 ಒಳ್ಳೇದಕ್ಕಾಗಿ ನಿನ್ನ ಸೇವಕನಿಗೆ ಹೊಣೆಯಾಗು; ಅಹಂಕಾರಿಗಳು ನನಗೆ ಹಿಂಸೆ ಮಾಡದಿರಲಿ.
119:123b.PSA.119.123 ನನ್ನ ಕಣ್ಣುಗಳು ನಿನ್ನ ರಕ್ಷಣೆಗೋಸ್ಕರವೂ ನಿನ್ನ ನೀತಿಯ ನುಡಿಗೋಸ್ಕರವೂ ನೆರವೇರುವದನ್ನು ನಿರೀಕ್ಷಿಸುತ್ತಾ ಮೊಬ್ಬಾಗುವವು.
119:124b.PSA.119.124 ನಿನ್ನ ಕರುಣೆಯ ಪ್ರಕಾರ ನಿನ್ನ ಸೇವಕನಿಗೆ ಮಾಡಿ ನಿನ್ನ ನಿಯಮಗಳನ್ನು ನನಗೆ ಕಲಿಸು.
119:125b.PSA.119.125 ನಾನು ನಿನ್ನ ಸೇವಕನು; ನಿನ್ನ ಸಾಕ್ಷಿಗಳನ್ನು ತಿಳಿಯುವ ಹಾಗೆ ನನಗೆ ಗ್ರಹಿಕೆಯನ್ನು ಕೊಡು.
119:126b.PSA.119.126 ಕರ್ತನೆ, ಕೆಲಸಮಾಡುವದಕ್ಕೆ ಇದು ನಿನಗೆ ಸಮಯವಾಗಿದೆ; ಅವರು ನಿನ್ನ ನ್ಯಾಯಪ್ರಮಾಣವನ್ನು ನಿರರ್ಥಕ ಮಾಡಿ ದ್ದಾರೆ.
119:127b.PSA.119.127 ಆದದರಿಂದ ನಿನ್ನ ಆಜ್ಞೆಗಳನ್ನು ಬಂಗಾರ ಕ್ಕಿಂತಲೂ ಹೌದು, ಅಪರಂಜಿಗಿಂತಲೂ ಹೆಚ್ಚಾಗಿ ಪ್ರೀತಿಮಾಡಿದ್ದೇನೆ.
119:128b.PSA.119.128 ನಿನ್ನ ಕಟ್ಟಳೆಗಳೆಲ್ಲಾ ಸರಿಯಾದ ವುಗಳೆಂದು ನಾನು ಎಣಿಸುತ್ತೇನೆ. ಮೋಸದ ಪ್ರತಿ ಯೊಂದು ಮಾರ್ಗವನ್ನು ಹಗೆಮಾಡುತ್ತೇನೆ.
119:129b.PSA.119.129 ನಿನ್ನ ಸಾಕ್ಷಿಗಳು ಅದ್ಭುತವಾದವುಗಳೇ; ಆದದ ರಿಂದ ನನ್ನ ಪ್ರಾಣವು ಅವುಗಳನ್ನು ಕೈಕೊಳ್ಳುತ್ತದೆ.
119:130b.PSA.119.130 ನಿನ್ನ ವಾಕ್ಯಗಳ ಪ್ರವೇಶವು ಬೆಳಕನ್ನು ಕೊಟ್ಟು ಮೂರ್ಖರಿಗೆ ಗ್ರಹಿಕೆಯನ್ನು ಉಂಟುಮಾಡುತ್ತದೆ.
119:131b.PSA.119.131 ನನ್ನ ಬಾಯಿಯನ್ನು ತೆರೆದು ಏದುತ್ತಿದ್ದೇನೆ. ನಿನ್ನ ಆಜ್ಞೆಗಳನ್ನು ನಾನು ಬಯಸಿದ್ದೇನೆ.
119:132b.PSA.119.132 ನೀನು ನನ್ನ ಕಡೆಗೆ ದೃಷ್ಟಿಸಿ ನಿನ್ನ ಹೆಸರನ್ನು ಪ್ರೀತಿಸುವವರಿಗೆ ಮಾಡುವ ಪ್ರಕಾರ ನನ್ನನ್ನು ಕರುಣಿಸು.
119:133b.PSA.119.133 ನನ್ನ ಹೆಜ್ಜೆಗಳನ್ನು ನಿನ್ನ ವಾಕ್ಯದಲ್ಲಿ ದೃಢಪಡಿಸು; ಯಾವ ದುಷ್ಟತನವಾದರೂ ನನ್ನ ಮೇಲೆ ದೊರೆತನ ಮಾಡ ದಿರಲಿ.
119:134b.PSA.119.134 ಮನುಷ್ಯರ ಬಲಾತ್ಕಾರದಿಂದ ನನ್ನನ್ನು ತಪ್ಪಿಸು; ಆಗ ನಿನ್ನ ಕಟ್ಟಳೆಗಳನ್ನು ನಾನು ಕೈಕೊಳ್ಳುವೆನು.
119:135b.PSA.119.135 ನಿನ್ನ ಮುಖವನ್ನು ನಿನ್ನ ಸೇವಕನ ಮೇಲೆ ಪ್ರಕಾಶಿಸ ಮಾಡು ಮತ್ತು ನಿನ್ನ ನಿಯಮಗಳನ್ನು ನನಗೆ ಕಲಿಸು.
119:136b.PSA.119.136 ಅವರು ನಿನ್ನ ನ್ಯಾಯಪ್ರಮಾಣವನ್ನು ಕೈ ಕೊಳ್ಳದ ನಿಮಿತ್ತ ಹೊಳೆಗಳಂತೆ ನನ್ನ ಕಣ್ಣೀರು ಹರಿಯುತ್ತದೆ.
119:137b.PSA.119.137 ಕರ್ತನೇ, ನೀನು ನೀತಿವಂತನು; ನಿನ್ನ ನ್ಯಾಯ ವಿಧಿಗಳು ಯಥಾರ್ಥವಾದವುಗಳೇ.
119:138b.PSA.119.138 ನಿನ್ನ ಸಾಕ್ಷಿ ಗಳನ್ನು ನೀತಿಯಾಗಿಯೂ ಬಹು ನಂಬಿಕೆಯುಳ್ಳವು ಗಳಾಗಿಯೂ ಆಜ್ಞಾಪಿಸಿದ್ದೀ.
119:139b.PSA.119.139 ನನ್ನ ವೈರಿಗಳು ನಿನ್ನ ವಾಕ್ಯಗಳನ್ನು ಮರೆತುಬಿಡುವದರಿಂದ ನನ್ನ ಆಸಕ್ತಿಯು ನನ್ನನ್ನು ದಹಿಸಿಯದೆ.
119:140b.PSA.119.140 ನಿನ್ನ ವಾಕ್ಯವು ಬಹಳ ಶುದ್ಧವಾಗಿದೆ; ಆದದರಿಂದ ನಿನ್ನ ಸೇವಕನು ಅದನ್ನು ಪ್ರೀತಿಮಾಡುತ್ತಾನೆ.
119:141b.PSA.119.141 ನಾನು ಅಲ್ಪನೂ ತಿರಸ್ಕರಿಸ ಲ್ಪಟ್ಟವನೂ ಆಗಿದ್ದರೂ ನಿನ್ನ ಕಟ್ಟಳೆಗಳನ್ನು ನಾನು ಮರೆತುಬಿಡುವದಿಲ್ಲ.
119:142b.PSA.119.142 ನಿನ್ನ ನೀತಿಯು ನಿತ್ಯವಾದ ನೀತಿಯೇ; ನಿನ್ನ ನ್ಯಾಯಪ್ರಮಾಣವು ಸತ್ಯವೇ.
119:143b.PSA.119.143 ಇಕ್ಕಟ್ಟೂ ಸಂಕಟವೂ ನನ್ನನ್ನು ಹಿಡಿದವೆ; ಆದರೂ ನಿನ್ನ ಆಜ್ಞೆಗಳು ನನಗೆ ಆನಂದವಾಗಿವೆ.
119:144b.PSA.119.144 ನಿನ್ನ ಸಾಕ್ಷಿಗಳ ನೀತಿ ನಿತ್ಯವಾದದ್ದು; ನನಗೆ ಗ್ರಹಿಕೆಯನ್ನು ಕೊಡು; ಆಗ ಬದುಕುವೆನು.
119:145b.PSA.119.145 ಪೂರ್ಣಹೃದಯದಿಂದ ನಾನು ಕೂಗಿದ್ದೇನೆ; ಓ ಕರ್ತನೇ, ನನಗೆ ಉತ್ತರಕೊಡು; ನಾನು ನಿನ್ನ ನಿಯಮಗಳನ್ನು ಕೈಕೊಳ್ಳುವೆನು.
119:146b.PSA.119.146 ನಿನಗೆ ಮೊರೆ ಯಿಟ್ಟಿದ್ದೇನೆ; ನನ್ನನ್ನು ರಕ್ಷಿಸು, ಆಗ ನಿನ್ನ ಕಟ್ಟಳೆಗಳನ್ನು ಕೈಕೊಳ್ಳುವೆನು.
119:147b.PSA.119.147 ಉದಯವನ್ನು ಎದುರುಗೊಂಡು ಮೊರೆಯಿಟ್ಟಿದ್ದೇನೆ; ನಿನ್ನ ವಾಕ್ಯಕ್ಕೆ ಎದುರು ನೋಡಿ ದ್ದೇನೆ.
119:148b.PSA.119.148 ನಾನು ನಿನ್ನ ವಾಕ್ಯದಲ್ಲಿ ಧ್ಯಾನ ಮಾಡುವ ಹಾಗೆ ನನ್ನ ಕಣ್ಣುಗಳು ರಾತ್ರಿ ಜಾವಗಳನ್ನು ಮುಂಗೊ ಂಡವೆ.
119:149b.PSA.119.149 ನಿನ್ನ ಪ್ರೀತಿ ಕರುಣೆಯ ಪ್ರಕಾರ ನನ್ನ ಮೊರೆಯನ್ನು ಕೇಳು; ಓ ಕರ್ತನೇ, ನಿನ್ನ ವಿಧಿಯ ಪ್ರಕಾರ ನನ್ನನ್ನು ಉಜ್ಜೀವಿಸು.
119:150b.PSA.119.150 ದುಷ್ಟತನವನ್ನು ಕಲ್ಪಿಸುವವರು ಸವಿಾಪವಾಗಿದ್ದಾರೆ; ನಿನ್ನ ನ್ಯಾಯ ಪ್ರಮಾಣಕ್ಕೆ ಅವರು ದೂರವಾಗಿದ್ದಾರೆ.
119:151b.PSA.119.151 ಓ ಕರ್ತನೇ, ನೀನು ಸವಿಾಪವೇ ಇದ್ದೀ; ನಿನ್ನ ಆಜ್ಞೆ ಗಳೆಲ್ಲಾ ಸತ್ಯವೇ.
119:152b.PSA.119.152 ನೀನು ಎಂದೆಂದಿಗೂ ಅವು ಗಳನ್ನು ಸ್ಥಾಪಿಸಿದ್ದೀ ಎಂದು ನಿನ್ನ ಸಾಕ್ಷಿಗಳಿಂದ ಪೂರ್ವದಲ್ಲಿ ತಿಳಿದೆನು.
119:153b.PSA.119.153 ನನ್ನ ಸಂಕಟವನ್ನು ನೋಡಿ ನನ್ನನ್ನು ತಪ್ಪಿಸಿ ಬಿಡು; ನಿನ್ನ ನ್ಯಾಯಪ್ರಮಾಣವನ್ನು ಮರೆತುಬಿಡೆನು.
119:154b.PSA.119.154 ನನ್ನ ವ್ಯಾಜ್ಯವನ್ನು ನಡಿಸಿ ನನ್ನನ್ನು ಬಿಡುಗಡೆ ಮಾಡು; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಉಜ್ಜೀವಿಸು.
119:155b.PSA.119.155 ದುಷ್ಟರಿಗೆ ರಕ್ಷಣೆಯು ದೂರವಾಗಿದೆ; ನಿನ್ನ ನಿಯ ಮಗಳನ್ನು ಅವರು ಹುಡುಕರು.
119:156b.PSA.119.156 ಓ ಕರ್ತನೇ, ನಿನ್ನ ಅಂತಃಕರಣಗಳು ಮಹತ್ತಾದವುಗಳು. ನಿನ್ನ ನ್ಯಾಯವಿಧಿಗಳ ಪ್ರಕಾರ ನನ್ನನ್ನು ಬದುಕಿಸು.
119:157b.PSA.119.157 ನನ್ನನ್ನು ಹಿಂಸಿಸುವವರೂ ನನ್ನ ವೈರಿಗಳೂ ಅನೇಕ ರಾಗಿದ್ದಾರೆ; ನಿನ್ನ ಸಾಕ್ಷಿಗಳಿಂದ ನಾನು ತೊಲಗೆನು.
119:158b.PSA.119.158 ನಿನ್ನ ವಾಕ್ಯವನ್ನು ಕೈಕೊಳ್ಳದ ಅಪರಾಧಿಗಳನ್ನು ನೋಡಿ ದುಃಖಪಟ್ಟಿದ್ದೇನೆ.
119:159b.PSA.119.159 ನಿನ್ನ ಕಟ್ಟಳೆಗಳನ್ನು ಪ್ರೀತಿಮಾಡುತ್ತೇನೆಂದು ನೋಡು; ಓ ಕರ್ತನೇ, ನಿನ್ನ ಪ್ರೀತಿ ಕರುಣೆಯ ಪ್ರಕಾರ ನನ್ನನ್ನು ಬದುಕಿಸು.
119:160b.PSA.119.160 ಆದಿ ಯಿಂದಲೂ ನಿನ್ನ ವಾಕ್ಯವು ಸತ್ಯವೇ; ನಿನ್ನ ನೀತಿಯ ನ್ಯಾಯವಿಧಿಗಳೆಲ್ಲಾ ನಿತ್ಯವಾಗಿವೆ.
119:161b.PSA.119.161 ಪ್ರಧಾನರು ಕಾರಣವಿಲ್ಲದೆ ನನ್ನನ್ನು ಹಿಂಸಿಸು ತ್ತಾರೆ. ನನ್ನ ಹೃದಯವು ನಿನ್ನ ವಾಕ್ಯಗಳಿಗೆ ಮಾತ್ರ ಭಯಪಡುತ್ತದೆ.
119:162b.PSA.119.162 ಬಹಳ ಕೊಳ್ಳೆಹೊಡೆದವನ ಹಾಗೆ ನಾನು ನಿನ್ನ ವಾಕ್ಯದ ನಿಮಿತ್ತ ಸಂತೋಷಪಡು ತ್ತೇನೆ.
119:163b.PSA.119.163 ಸುಳ್ಳನ್ನು ಹಗೆಮಾಡಿ ಅಸಹ್ಯಿಸಿಬಿಡುತ್ತೇನೆ. ನಿನ್ನ ನ್ಯಾಯಪ್ರಮಾಣವನ್ನು ಪ್ರೀತಿಮಾಡುತ್ತೇನೆ.
119:164b.PSA.119.164 ನಿನ್ನ ನೀತಿಯ ವಿಧಿಗಳ ನಿಮಿತ್ತ ದಿವಸಕ್ಕೆ ಏಳು ಸಾರಿ ನಿನ್ನನ್ನು ಸ್ತುತಿಸುತ್ತೇನೆ.
119:165b.PSA.119.165 ನಿನ್ನ ನ್ಯಾಯಪ್ರಮಾಣ ವನ್ನು ಪ್ರೀತಿಮಾಡುವವರಿಗೆ ಸಂಪೂರ್ಣ ಸಮಾ ಧಾನ ಉಂಟು; ಅವರಿಗೆ ಆತಂಕವೇನೂ ಇರುವದಿಲ್ಲ.
119:166b.PSA.119.166 ಕರ್ತನೇ, ನಿನ್ನ ರಕ್ಷಣೆಗೆ ಕಾದುಕೊಂಡಿದ್ದೇನೆ; ನಿನ್ನ ಆಜ್ಞೆಗಳನ್ನು ನಡಿಸಿದ್ದೇನೆ.
119:167b.PSA.119.167 ನನ್ನ ಪ್ರಾಣವು ನಿನ್ನ ಸಾಕ್ಷಿಗಳನ್ನು ಕೈಕೊಂಡಿದೆ; ನಾನು ಅವುಗಳನ್ನು ಬಹಳವಾಗಿ ಪ್ರೀತಿಮಾಡುತ್ತೇನೆ;
119:168b.PSA.119.168 ನಿನ್ನ ಕಟ್ಟಳೆ ಗಳನ್ನೂ ಸಾಕ್ಷಿಗಳನ್ನೂ ಕೈಕೊಳ್ಳುತ್ತೇನೆ; ನನ್ನ ಮಾರ್ಗ ಗಳೆಲ್ಲಾ ನಿನ್ನ ಮುಂದೆ ಇವೆ.
119:169b.PSA.119.169 ಓ ಕರ್ತನೇ, ನನ್ನ ಕೂಗು ನಿನ್ನ ಸನ್ನಿಧಿಗೆ ಮುಟ್ಟಲಿ; ನಿನ್ನ ವಾಕ್ಯದ ಪ್ರಕಾರ ನನಗೆ ಜ್ಞಾನವನ್ನು ಕೊಡು.
119:170b.PSA.119.170 ನನ್ನ ವಿಜ್ಞಾಪನೆಯು ನಿನ್ನ ಸಮ್ಮುಖಕ್ಕೆ ಬರಲಿ; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಬಿಡಿಸು.
119:171b.PSA.119.171 ನೀನು ನಿನ್ನ ನಿಯಮಗಳನ್ನು ನನಗೆ ಕಲಿಸಿದಾಗ ನನ್ನ ತುಟಿಗಳು ನಿನ್ನ ಸ್ತೋತ್ರವನ್ನು ನುಡಿಯುತ್ತವೆ.
119:172b.PSA.119.172 ನನ್ನ ನಾಲಿಗೆಯು ನಿನ್ನ ವಾಕ್ಯದ ವಿಷಯವಾಗಿ ಮಾತನಾಡುತ್ತದೆ. ನಿನ್ನ ಆಜ್ಞೆಗಳೆಲ್ಲಾ ನೀತಿಯೇ.
119:173b.PSA.119.173 ನಿನ್ನ ಕೈ ನನ್ನ ಸಹಾಯಕ್ಕಾಗಿರಲಿ; ನಿನ್ನ ಕಟ್ಟಳೆ ಗಳನ್ನು ನಾನು ಆದುಕೊಂಡಿದ್ದೇನೆ.
119:174b.PSA.119.174 ಕರ್ತನೇ, ನಿನ್ನ ರಕ್ಷಣೆಗೆ ಆಶೆಪಟ್ಟಿದೇನೆ. ನಿನ್ನ ನ್ಯಾಯಪ್ರಮಾಣವು ನನ್ನ ಆನಂದವಾಗಿದೆ.
119:175b.PSA.119.175 ನನ್ನ ಪ್ರಾಣವು ಬದುಕಿ ನಿನ್ನನ್ನು ಸ್ತುತಿಸಲಿ; ನಿನ್ನ ನ್ಯಾಯವಿಧಿಗಳು ನನಗೆ ಸಹಾಯಮಾಡಲಿ.ತಪ್ಪಿಹೋದ ಕುರಿಯ ಹಾಗೆ ತೊಳಲ್ಲಿದ್ದೇನೆ; ನಿನ್ನ ಸೇವಕನನ್ನು ಹುಡುಕು; ನಿನ್ನ ಆಜ್ಞೆಗಳನ್ನು ಮರೆತುಬಿಡೆನು.
119:176b.PSA.119.176 ತಪ್ಪಿಹೋದ ಕುರಿಯ ಹಾಗೆ ತೊಳಲ್ಲಿದ್ದೇನೆ; ನಿನ್ನ ಸೇವಕನನ್ನು ಹುಡುಕು; ನಿನ್ನ ಆಜ್ಞೆಗಳನ್ನು ಮರೆತುಬಿಡೆನು.
120
120:1b.PSA.120.001 ನನ್ನ ಇಕ್ಕಟ್ಟಿನಲ್ಲಿ ನಾನು ಕರ್ತನಿಗೆ ಕೂಗಿದೆನು; ಆತನು ನನಗೆ ಉತ್ತರ ಕೊಟ್ಟನು.
120:2b.PSA.120.002 ಓ ಕರ್ತನೇ, ನನ್ನ ಪ್ರಾಣವನ್ನು ಸುಳ್ಳು ತುಟಿಯಿಂದಲೂ ಮೋಸದ ನಾಲಿಗೆಯಿಂದಲೂ ಬಿಡಿಸು.
120:3b.PSA.120.003 ಸುಳ್ಳಿನ ನಾಲಿಗೆಯೇ, ದೇವರು ನಿನಗೇನು ಮಾಡ ಬೇಕು? ಆತನು ನಿನಗೇನು ಕೊಡಬೇಕು?
120:4b.PSA.120.004 ಪರಾ ಕ್ರಮಶಾಲಿಯ ಹದವಾದ ಬಾಣಗಳು ಮತ್ತು ಜಾಲಿ ಮರದ ಕೆಂಡಗಳು ನಿನಗೆ ಕೊಡಲ್ಪಡಲಿ.
120:5b.PSA.120.005 ಕೇದಾರಿನ ಗುಡಾರಗಳ ಬಳಿಯಲ್ಲಿ ವಾಸ ಮಾಡಿ ಮೇಷೆಕಿನಲ್ಲಿ ಪ್ರವಾಸಿಯಾಗಿರುವದರಿಂದ ನನಗೆ ಅಯ್ಯೋ!
120:6b.PSA.120.006 ನನ್ನ ಪ್ರಾಣವು ಸಮಾಧಾನವನ್ನು ಹಗೆ ಮಾಡುವವರ ಸಂಗಡ ವಾಸಮಾಡಿ ಸಾಕಾಯಿತು.ನಾನು ಸಮಾಧಾನವಾಗಿದ್ದೇನೆ; ಆದರೆ ನಾನು ಮಾತಾಡಲು ಅವರು ಯುದ್ಧಮಾಡು ವದಕ್ಕಿದ್ದಾರೆ.
120:7b.PSA.120.007 ನಾನು ಸಮಾಧಾನವಾಗಿದ್ದೇನೆ; ಆದರೆ ನಾನು ಮಾತಾಡಲು ಅವರು ಯುದ್ಧಮಾಡು ವದಕ್ಕಿದ್ದಾರೆ.
121
121:1b.PSA.121.001 ನಾನು ಕಣ್ಣೆತ್ತಿ ಬೆಟ್ಟಗಳ ಕಡೆಗೆ ನೋಡುತ್ತೇನೆ; ನನ್ನ ಸಹಾಯವು ಎಲ್ಲಿಂದ ಬರುವದು?
121:2b.PSA.121.002 ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ ಕರ್ತನ ಬಳಿಯಿಂದಲೇ ನನ್ನ ಸಹಾ ಯವು ಬರುತ್ತದೆ.
121:3b.PSA.121.003 ಆತನು ನಿನ್ನ ಪಾದವನ್ನು ಕದಲಿ ಸದಿರಲಿ; ನಿನ್ನನ್ನು ಕಾಪಾಡುವಾತನು ತೂಕಡಿಸುವ ದಿಲ್ಲ.
121:4b.PSA.121.004 ಇಗೋ, ಇಸ್ರಾಯೇಲನ್ನು ಕಾಪಾಡುವಾತನು ತೂಕಡಿಸುವದಿಲ್ಲ, ನಿದ್ರಿಸುವದಿಲ್ಲ.
121:5b.PSA.121.005 ಕರ್ತನು ನಿನ್ನನ್ನು ಕಾಪಾಡುವಾತನಾಗಿದ್ದಾನೆ; ಕರ್ತನು ನಿನ್ನ ಬಲ ಗಡೆಯಲ್ಲಿ ನಿನ್ನ ನೆರಳಿನಂತೆ ಇದ್ದಾನೆ.
121:6b.PSA.121.006 ಹಗಲಲ್ಲಿ ಸೂರ್ಯನೂ ರಾತ್ರಿಯಲ್ಲಿ ಚಂದ್ರನೂ ನಿನ್ನನ್ನು ಬಾಧಿಸುವದಿಲ್ಲ.
121:7b.PSA.121.007 ಕರ್ತನು ಎಲ್ಲಾ ಕೇಡಿನಿಂದ ನಿನ್ನನೂ ನಿನ್ನ ಪ್ರಾಣವನ್ನೂ ಕಾಪಾಡುವನು.ಕರ್ತನು ನಿನ್ನ ಹೋಗೋಣವನ್ನೂ ಬರೋಣವನ್ನೂ ಇಂದಿನಿಂದ ಸದಾಕಾಲವೂ ಕಾಪಾಡುವನು.
121:8b.PSA.121.008 ಕರ್ತನು ನಿನ್ನ ಹೋಗೋಣವನ್ನೂ ಬರೋಣವನ್ನೂ ಇಂದಿನಿಂದ ಸದಾಕಾಲವೂ ಕಾಪಾಡುವನು.
122
122:1b.PSA.122.001 ಕರ್ತನ ಆಲಯಕ್ಕೆ ಹೋಗೋಣ ಎಂದು ಅವರು ನನಗೆ ಹೇಳಿದಾಗ ನನಗೆ ಸಂತೋಷವಾಯಿತು.
122:2b.PSA.122.002 ಓ ಯೆರೂಸಲೇಮೇ, ನಮ್ಮ ಪಾದಗಳು ನಿನ್ನ ಬಾಗಲುಗಳಲ್ಲಿ ನಿಲ್ಲುತ್ತವೆ.
122:3b.PSA.122.003 ಯೆರೂಸಲೇಮು ಒಟ್ಟಾಗಿ ಜೋಡಿಸಲ್ಪಟ್ಟ ಪಟ್ಟ ಣದ ಹಾಗೆ ಕಟ್ಟಲ್ಪಟ್ಟಿದೆ.
122:4b.PSA.122.004 ಅಲ್ಲಿಗೆ ಗೋತ್ರಗಳು, ಕರ್ತನ ಗೋತ್ರಗಳು, ಇಸ್ರಾಯೇಲಿಗೆ ಸಾಕ್ಷಿಯಾಗಿ, ಕರ್ತನ ಹೆಸರನ್ನು ಕೊಂಡಾಡುವದಕ್ಕೆ ಹೋಗುತ್ತದೆ.
122:5b.PSA.122.005 ಅಲ್ಲಿ ನ್ಯಾಯತೀರ್ವಿಕೆಗೆ ಸಿಂಹಾಸನಗಳೂ ದಾವೀದನ ಮನೆಯ ಸಿಂಹಾಸನಗಳೂ ಇರುತ್ತವೆ.
122:6b.PSA.122.006 ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ. ಯೆರೂಸಲೇಮನ್ನು ಪ್ರೀತಿಮಾಡುವವರು ಅಭಿವೃದ್ಧಿ ಯಾಗುವರು.
122:7b.PSA.122.007 ನಿನ್ನ ಪ್ರಾಕಾರದಲ್ಲಿ ಸಮಾಧಾನವೂ ಅರಮನೆಗಳಲ್ಲಿ ಅಭಿವೃದ್ಧಿಯೂ ಇರಲಿ.
122:8b.PSA.122.008 ನನ್ನ ಸಹೋದರರ ನಿಮಿತ್ತವೂ ನನ್ನ ಸ್ನೇಹಿತರ ನಿಮಿತ್ತವೂ ನಿನ್ನಲ್ಲಿ ಸಮಾಧಾನವಿರಲೆಂದು ಈಗ ಹೇಳುತ್ತೇನೆ.ನಮ್ಮ ದೇವರಾದ ಕರ್ತನ ಆಲಯದ ನಿಮಿತ್ತ ನಿನಗೆ ಒಳ್ಳೇದನ್ನು ಹುಡುಕುತ್ತೇನೆ.
122:9b.PSA.122.009 ನಮ್ಮ ದೇವರಾದ ಕರ್ತನ ಆಲಯದ ನಿಮಿತ್ತ ನಿನಗೆ ಒಳ್ಳೇದನ್ನು ಹುಡುಕುತ್ತೇನೆ.
123
123:1b.PSA.123.001 ಪರಲೋಕದಲ್ಲಿ ವಾಸವಾಗಿರುವಾತನೇ, ನಿನ್ನ ಕಡೆಗೆ ನನ್ನ ಕಣ್ಣುಗಳನ್ನು ಎತ್ತುತ್ತೇನೆ.
123:2b.PSA.123.002 ಇಗೋ, ದಾಸರ ಕಣ್ಣುಗಳು ತಮ್ಮ ಯಜಮಾನರ ಕೈಯನ್ನೂ ದಾಸಿಯ ಕಣ್ಣುಗಳು ತನ್ನ ಯಜಮಾನಿಯ ಕೈಯನ್ನೂ ನೋಡುವ ಪ್ರಕಾರವೇ, ನಮ್ಮ ದೇವರಾದ ಕರ್ತನು ನಮ್ಮನ್ನು ಕರುಣಿಸುವ ವರೆಗೆ ಆತನನ್ನೇ ನಿರೀಕ್ಷಿಸುತ್ತವೆ.
123:3b.PSA.123.003 ನಮ್ಮನ್ನು ಕರುಣಿಸು; ಓ ಕರ್ತನೇ, ನಮ್ಮನ್ನು ಕರುಣಿಸು; ಬಹಳವಾಗಿ ತಿರ ಸ್ಕಾರದಿಂದ ತುಂಬಿದ್ದೇವೆ.ಭೋಗಿಗಳ ಹಾಸ್ಯದಿಂದ ನಮ್ಮ ಹೃದಯವು ತುಂಬಿಯದೆ, ಗರ್ವಿಷ್ಟರ ನಿಂದೆ ಯಿಂದ ನಮ್ಮ ಮನಸ್ಸು ಬೇಸತ್ತು ಹೋಯಿತು.
123:4b.PSA.123.004 ಭೋಗಿಗಳ ಹಾಸ್ಯದಿಂದ ನಮ್ಮ ಹೃದಯವು ತುಂಬಿಯದೆ, ಗರ್ವಿಷ್ಟರ ನಿಂದೆ ಯಿಂದ ನಮ್ಮ ಮನಸ್ಸು ಬೇಸತ್ತು ಹೋಯಿತು.
124
124:1b.PSA.124.001 ಇಸ್ರಾಯೇಲ್ ಈಗ ಹೇಳುವದೇನಂದರೆ: ಕರ್ತನು ನಮ್ಮ ಪಕ್ಷ ಇಲ್ಲದಿದ್ದರೆ,
124:2b.PSA.124.002 ಮನುಷ್ಯರು ನಮಗೆ ವಿರೋಧವಾಗಿ ಏಳುವಾಗ, ಕರ್ತನು ನಮಗಿಲ್ಲದಿದ್ದರೆ ನಮ್ಮ ಮೇಲೆ ಅವರ ಕೋಪವು ಉರಿದು,
124:3b.PSA.124.003 ಅವರು ನಮ್ಮನ್ನು ಜೀವಿತರಾಗಿ ನುಂಗಿಬಿಡುತ್ತಿದ್ದರು.
124:4b.PSA.124.004 ಆಗ ನೀರುಗಳು ನಮ್ಮನ್ನು ಮುಣುಗಿಸುತ್ತಿದ್ದವು; ತೊರೆಯು ನಮ್ಮ ಪ್ರಾಣದ ಮೇಲೆ ಹರಿಯುತ್ತಿತ್ತು.
124:5b.PSA.124.005 ಆಗ ನಮ್ಮ ಪ್ರಾಣದ ಮೇಲೆ ಗರ್ವದ ನೀರುಗಳು ಹರಿಯುತ್ತಿ ದ್ದವು.
124:6b.PSA.124.006 ಆದರೆ ನಮ್ಮನ್ನು ಅವರ ಹಲ್ಲುಗಳಿಗೆ ಬೇಟೆ ಯಾಗಿ ಕೊಡದೆ ಇದ್ದ ಕರ್ತನಿಗೆ ಸ್ತೋತ್ರವಾಗಲಿ.
124:7b.PSA.124.007 ನಮ್ಮ ಪ್ರಾಣವು ಪಕ್ಷಿಯ ಹಾಗೆ ಬೇಟೆಗಾರರ ಉರ್ಲಿನಿಂದ ತಪ್ಪಿಸಿಕೊಂಡಿತು; ಬಲೆಯು ಹರಿಯಿತು; ನಾವು ತಪ್ಪಿಸಿಕೊಂಡೆವು.ನಮ್ಮ ಸಹಾಯವು ಆಕಾ ಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನ ಹೆಸರಿನಲ್ಲಿ ಇದೆ.
124:8b.PSA.124.008 ನಮ್ಮ ಸಹಾಯವು ಆಕಾ ಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನ ಹೆಸರಿನಲ್ಲಿ ಇದೆ.
125
125:1b.PSA.125.001 ಕರ್ತನಲ್ಲಿ ಭರವಸವಿಡುವವರು ಚೀಯೋನ್ ಪರ್ವತದ ಹಾಗಿ ದ್ದಾರೆ; ಅದು ಕದಲದೆ ಯುಗಯುಗಕ್ಕೂ ಇರುವದು.
125:2b.PSA.125.002 ಯೆರೂಸಲೇಮಿನ ಸುತ್ತಲೂ ಬೆಟ್ಟಗಳಿರುವಂತೆ ಕರ್ತನು ಈಗಿನಿಂದ ಯುಗಯುಗಕ್ಕೂ ತನ್ನ ಜನರ ಸುತ್ತಲೂ ಇದ್ದಾನೆ.
125:3b.PSA.125.003 ನೀತಿವಂತರು ತಮ್ಮ ಕೈಗಳನ್ನು ಅನ್ಯಾಯಕ್ಕೆ ಚಾಚದ ಹಾಗೆ, ದುಷ್ಟನ ಕೋಲು ನೀತಿವಂತರ ಸ್ವಾಸ್ತ್ಯದ ಮೇಲೆ ನೆಲೆಯಾಗಿರುವದಿಲ್ಲ.
125:4b.PSA.125.004 ಓ ಕರ್ತನೇ, ಒಳ್ಳೆಯವರಿಗೂ ಯಥಾರ್ಥ ಹೃದಯವುಳ್ಳವರಿಗೂ ಒಳ್ಳೇದನ್ನು ಮಾಡು.ಆದರೆ ತಮ್ಮ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು ದುಷ್ಟತನ ಮಾಡುವವರ ಸಂಗಡ ಕರ್ತನು ಹೋಗ ಮಾಡುವನು. ಇಸ್ರಾಯೇಲಿನ ಮೇಲೆ ಸಮಾಧಾನ ವಿರುವದು.
125:5b.PSA.125.005 ಆದರೆ ತಮ್ಮ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು ದುಷ್ಟತನ ಮಾಡುವವರ ಸಂಗಡ ಕರ್ತನು ಹೋಗ ಮಾಡುವನು. ಇಸ್ರಾಯೇಲಿನ ಮೇಲೆ ಸಮಾಧಾನ ವಿರುವದು.
126
126:1b.PSA.126.001 ಕರ್ತನು ಚೀಯೋನನ್ನು ಸೆರೆಯಿಂದ ಬಿಡಿಸಿದಾಗ ನಾವು ಕನಸು ಕಂಡ ವರ ಹಾಗಿದ್ದೆವು.
126:2b.PSA.126.002 ಆಗ ನಮ್ಮ ಬಾಯಿ ನಗೆಯಿಂದಲೂ ನಾಲಿಗೆ ಉತ್ಸಾಹ ಧ್ವನಿಯಿಂದಲೂ ತುಂಬಿದ್ದವು; ಆಗ ಅನ್ಯಜನರು--ಕರ್ತನು ಇವರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ ಎಂದು ಹೇಳಿದರು.
126:3b.PSA.126.003 ಕರ್ತನು ನಮಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ; ಆದಕಾರಣ ನಾವು ಸಂತೋಷಿಸುತ್ತಾ ಇದ್ದೇವೆ.
126:4b.PSA.126.004 ಓ ಕರ್ತನೇ, ದಕ್ಷಿಣದಲ್ಲಿರುವ ಹೊಳೆಗಳ ಹಾಗೆ ಸೆರೆಯಿಂದ ನಮ್ಮನ್ನು ತಿರಿಗಿ ಬರಮಾಡು.
126:5b.PSA.126.005 ಕಣ್ಣೀರಿ ನಿಂದ ಬಿತ್ತುವವರು ಉತ್ಸಾಹದಲ್ಲಿ ಕೊಯ್ಯುವರು. ಅಮೂಲ್ಯವಾದ ಬೀಜವನ್ನು ಹೊತ್ತುಕೊಂಡು ಅಳುತ್ತಾ ಹೋಗುವವನುತನ್ನ ಸಿವುಡುಗಳನ್ನು ತರುವವನಾಗಿ, ನಿಸ್ಸಂದೇಹವಾಗಿ ಉತ್ಸಾಹ ಧ್ವನಿಯಿಂದ ತಿರುಗಿ ಬರುವನು.
126:6b.PSA.126.006 ತನ್ನ ಸಿವುಡುಗಳನ್ನು ತರುವವನಾಗಿ, ನಿಸ್ಸಂದೇಹವಾಗಿ ಉತ್ಸಾಹ ಧ್ವನಿಯಿಂದ ತಿರುಗಿ ಬರುವನು.
127
127:1b.PSA.127.001 ಕರ್ತನು ಮನೆಯನ್ನು ಕಟ್ಟದಿದ್ದರೆ, ಅದನ್ನು ಕಟ್ಟುವವರು ವ್ಯರ್ಥವಾಗಿ ಕಷ್ಟಪಡುತ್ತಾರೆ; ಕರ್ತನು ಪಟ್ಟಣವನ್ನು ಕಾಪಾಡದೆ ಇದ್ದರೆ ಅದನ್ನು ಕಾಪಾಡುವವನು ವ್ಯರ್ಥವಾಗಿ ಎಚ್ಚರ ವಾಗಿರುತ್ತಾನೆ.
127:2b.PSA.127.002 ರೊಟ್ಟಿಗಾಗಿ ವ್ಯಥೆಪಟ್ಟು ಬೆಳಿಗ್ಗೆ ಬೇಗ ಏಳುವದೂ ರಾತ್ರಿ ತಡವಾಗಿ ಮಲಗುವದೂ ವ್ಯರ್ಥವೇ. ಆತನು ತನ್ನ ಪ್ರಿಯರಿಗೆ ನಿದ್ರೆಯಲ್ಲಿಯೂ ಅದನ್ನು ಕೊಡುತ್ತಾನೆ.
127:3b.PSA.127.003 ಇಗೋ, ಮಕ್ಕಳು ಕರ್ತನಿಂದ ಸಿಕ್ಕಿದ ಸ್ವಾಸ್ಥ್ಯವಾಗಿ ದ್ದಾರೆ; ಗರ್ಭಫಲವು ಆತನ ಬಹುಮಾನವಾಗಿದೆ.
127:4b.PSA.127.004 ಯೌವನದ ಮಕ್ಕಳು ಪರಾಕ್ರಮಶಾಲಿಯ ಕೈಯಲ್ಲಿ ಬಾಣಗಳು ಹೇಗೋ ಹಾಗೆಯೇ.ತನ್ನ ಬತ್ತಳಿಕೆ ಯನ್ನು ಅವರಿಂದ ತುಂಬಿಸಿದ ಪುರುಷನು ಧನ್ಯನು; ಶತ್ರುಗಳ ಸಂಗಡ ಬಾಗಲಲ್ಲಿ ಮಾತನಾಡುವಾಗ ಅವರು ನಾಚಿಕೆಪಡರು.
127:5b.PSA.127.005 ತನ್ನ ಬತ್ತಳಿಕೆ ಯನ್ನು ಅವರಿಂದ ತುಂಬಿಸಿದ ಪುರುಷನು ಧನ್ಯನು; ಶತ್ರುಗಳ ಸಂಗಡ ಬಾಗಲಲ್ಲಿ ಮಾತನಾಡುವಾಗ ಅವರು ನಾಚಿಕೆಪಡರು.
128
128:1b.PSA.128.001 ಕರ್ತನಿಗೆ ಭಯಪಟ್ಟು ಆತನ ಮಾರ್ಗಗಳಲ್ಲಿ ನಡೆದುಕೊಳ್ಳುವ ಪ್ರತಿಯೊಬ್ಬನು ಧನ್ಯನು.
128:2b.PSA.128.002 ಹೀಗಾದರೆ ನಿನ್ನ ಕೈಗಳ ಕಷ್ಟಾರ್ಜಿತವನ್ನು ನೀನು ಊಟಮಾಡಿ ಸಂತೋಷ ವುಳ್ಳವನಾಗಿರುವಿ, ನಿನಗೆ ಒಳ್ಳೇಯದಾಗುವದು.
128:3b.PSA.128.003 ನಿನ್ನ ಹೆಂಡತಿಯು ನಿನ್ನ ಮನೆಯ ಪಕ್ಕದಲ್ಲಿರುವ ಫಲಭರಿತ ವಾದ ದ್ರಾಕ್ಷೇಗಿಡದ ಹಾಗೆಯೂ ನಿನ್ನ ಮೇಜಿನ ಸುತ್ತಲಿರುವ ನಿನ್ನ ಮಕ್ಕಳು ಎಣ್ಣೇಮರಗಳ ಸಸಿಗಳ ಹಾಗೆಯೂ ಇರುವರು.
128:4b.PSA.128.004 ಇಗೋ, ಕರ್ತನಿಗೆ ಭಯಪಡುವ ಮನುಷ್ಯನು ಹೀಗೆಯೇ ಆಶೀರ್ವದಿಸಲ್ಪಡುವನು.
128:5b.PSA.128.005 ಕರ್ತನು ನಿನ್ನನ್ನು ಚೀಯೋನಿನೊಳಗಿಂದ ಆಶೀರ್ವದಿಸುವನು; ನಿನ್ನ ಜೀವನದ ದಿವಸಗಳೆಲ್ಲಾ ನೀನು ಯೆರೂಸಲೇಮಿನ ಒಳ್ಳೆಯದನ್ನು ನೋಡುವಿ.ಹೌದು, ನಿನ್ನ ಮಕ್ಕಳ ಮಕ್ಕಳನ್ನೂ ಇಸ್ರಾಯೇಲಿನ ಮೇಲಿರುವ ಸಮಾಧಾನ ವನ್ನೂ ನೀನು ನೋಡುವಿ.
128:6b.PSA.128.006 ಹೌದು, ನಿನ್ನ ಮಕ್ಕಳ ಮಕ್ಕಳನ್ನೂ ಇಸ್ರಾಯೇಲಿನ ಮೇಲಿರುವ ಸಮಾಧಾನ ವನ್ನೂ ನೀನು ನೋಡುವಿ.
129
129:1b.PSA.129.001 ನನ್ನ ಯೌವನದಿಂದ ನನಗೆ ಅವರು ಬಹಳ ಬಾಧಿಸಿದ್ದಾರೆಂದು ಇಸ್ರಾ ಯೇಲು ಈಗ ಹೇಳಬಹುದು.
129:2b.PSA.129.002 ನನ್ನ ಯೌವನ ದಿಂದ ಅವರು ನನ್ನನ್ನು ಬಹಳ ಬಾಧಿಸಿದರು; ಆದರೆ ಅವರು ನನ್ನನ್ನು ಗೆಲ್ಲಲಿಲ್ಲ.
129:3b.PSA.129.003 ಉಳುವವರು ನನ್ನ ಬೆನ್ನಿನ ಮೇಲೆ ಉತ್ತು ತಮ್ಮ ಸಾಲುಗಳನ್ನು ಉದ್ದ ಮಾಡಿದ್ದಾರೆ.
129:4b.PSA.129.004 ಕರ್ತನು ನೀತಿವಂತನು; ದುಷ್ಟರ ಹಗ್ಗಗಳನ್ನು ಕೊಯಿದುಬಿಟ್ಟಿದ್ದಾನೆ.
129:5b.PSA.129.005 ಚೀಯೋನನ್ನು ಹಗೆಮಾಡುವವರೆಲ್ಲರು ನಾಚಿಕೆಪಟ್ಟು ಹಿಂದಿರುಗಲಿ.
129:6b.PSA.129.006 ಕೀಳುವದಕ್ಕಿಂತ ಮುಂಚೆ ಒಣಗಿ ಹೋಗುವ ಮಾಳಿಗೇ ಹುಲ್ಲಿನ ಹಾಗೆ ಅವರು ಇರಲಿ.
129:7b.PSA.129.007 ಅದನ್ನು ಕೊಯ್ಯುವವನು ತನ್ನ ಕೈಯನ್ನೂ ಸಿವುಡು ಕಟ್ಟುವವನು ತನ್ನ ಉಡಿಲನ್ನೂ ತುಂಬಿಸನು.ಹಾದು ಹೋಗು ವವರು -- ಕರ್ತನ ಆಶೀರ್ವಾದವು ನಿಮ್ಮ ಮೇಲೆ ಇರಲಿ, ಕರ್ತನ ಹೆಸರಿನಲ್ಲಿ ನಿಮ್ಮನ್ನು ಆಶೀರ್ವ ದಿಸುತ್ತೇವೆ ಎಂದು ಹೇಳುವುದಿಲ್ಲ.
129:8b.PSA.129.008 ಹಾದು ಹೋಗು ವವರು -- ಕರ್ತನ ಆಶೀರ್ವಾದವು ನಿಮ್ಮ ಮೇಲೆ ಇರಲಿ, ಕರ್ತನ ಹೆಸರಿನಲ್ಲಿ ನಿಮ್ಮನ್ನು ಆಶೀರ್ವ ದಿಸುತ್ತೇವೆ ಎಂದು ಹೇಳುವುದಿಲ್ಲ.
130
130:1b.PSA.130.001 ಓ ಕರ್ತನೇ, ಆಗಾಧಗಳೊಳಗಿಂದ ನಿನಗೆ ಕೂಗುತ್ತೇನೆ.
130:2b.PSA.130.002 ಕರ್ತನೇ, ನನ್ನ ಸ್ವರವನ್ನು ಕೇಳು; ನಿನ್ನ ಕಿವಿಗಳು ನನ್ನ ವಿಜ್ಞಾಪನೆಗಳ ಮೊರೆಯನ್ನು ಆಲೈಸುತ್ತಾ ಇರಲಿ.
130:3b.PSA.130.003 ಕರ್ತನೇ, ನೀನು ಅಕ್ರಮಗಳ ಮೇಲೆ ಕಣ್ಣಿಟ್ಟರೆ ಓ ಕರ್ತನೇ, ಯಾರು ನಿಲ್ಲುವರು?
130:4b.PSA.130.004 ಆದರೆ ಜನರು ನಿನಗೆ ಭಯಪಡುವ ಹಾಗೆ ನಿನ್ನಲ್ಲಿ ಕ್ಷಮಾಪಣೆ ಉಂಟು.
130:5b.PSA.130.005 ಕರ್ತನನ್ನು ನಿರೀಕ್ಷಿಸುತ್ತೇನೆ; ನನ್ನ ಪ್ರಾಣವು ನಿರೀಕ್ಷಿಸುತ್ತದೆ; ಆತನ ವಾಕ್ಯದಲ್ಲಿ ನಿರೀಕ್ಷಿಸುತ್ತೇನೆ.
130:6b.PSA.130.006 ಉದಯಕ್ಕಾಗಿ ಕಾದುಕೊಳ್ಳುವವ ರಿಗಿಂತ ಹೌದು, ಉದಯಕ್ಕಾಗಿ ಕಾದುಕೊಳ್ಳುವವರಿ ಗಿಂತ ನನ್ನ ಪ್ರಾಣವು ಕರ್ತನಿಗಾಗಿ ನಿರೀಕ್ಷಿಸುತ್ತದೆ.
130:7b.PSA.130.007 ಇಸ್ರಾಯೇಲು ಕರ್ತನಲ್ಲಿ ನಿರೀಕ್ಷಿಸಲಿ; ಕರ್ತನ ಬಳಿಯಲ್ಲಿ ಕರುಣೆಯೂ ಆತನಲ್ಲಿ ವಿಮೋಚನೆಯೂ ಬಹಳವಾಗಿದೆ.ಆತನು ಇಸ್ರಾಯೇಲನ್ನು ಅದರ ಎಲ್ಲಾ ಅಕ್ರಮಗಳಿಂದ ವಿಮೋಚಿಸುವನು.
130:8b.PSA.130.008 ಆತನು ಇಸ್ರಾಯೇಲನ್ನು ಅದರ ಎಲ್ಲಾ ಅಕ್ರಮಗಳಿಂದ ವಿಮೋಚಿಸುವನು.
131
131:1b.PSA.131.001 ಕರ್ತನೇ, ನನ್ನ ಹೃದಯವು ಗರ್ವದ್ದಲ್ಲ; ನನ್ನ ಕಣ್ಣುಗಳು ಅಹಂಭಾವ ದವುಗಳೂ ಅಲ್ಲ; ದೊಡ್ಡ ವಿಷಯಗಳಲ್ಲಿಯೂ ನನಗೆ ನಿಲುಕಲಾರದವುಗಳಲ್ಲಿಯೂ ನಾನು ನಡೆದುಕೊಳ್ಳು ವದಿಲ್ಲ.
131:2b.PSA.131.002 ಮೊಲೆ ಬಿಡಿಸಿದ ಕೂಸು ತನ್ನ ತಾಯಿಯ ಬಳಿಯಲ್ಲಿ ಇರುವ ಪ್ರಕಾರ ನಿಶ್ಚಯವಾಗಿ ನನ್ನನ್ನು ಸಂತೈಸಿಕೊಂಡು ಮೌನವಾಗಿದ್ದೇನೆ; ನನ್ನ ಪ್ರಾಣವು ಮೊಲೆ ಬಿಡಿಸಿದ ಕೂಸಿನ ಹಾಗೆ ನನ್ನ ಬಳಿಯಲ್ಲಿ ಅದೆ.ಇಸ್ರಾಯೇಲು ಈಗಿನಿಂದ ಯುಗಯುಗಕ್ಕೂ ಕರ್ತನನ್ನು ಎದುರುನೋಡಲಿ.
131:3b.PSA.131.003 ಇಸ್ರಾಯೇಲು ಈಗಿನಿಂದ ಯುಗಯುಗಕ್ಕೂ ಕರ್ತನನ್ನು ಎದುರುನೋಡಲಿ.
132
132:1b.PSA.132.001 ಕರ್ತನೇ, ದಾವೀದನನ್ನೂ ಅವನ ಎಲ್ಲಾ ಶ್ರಮೆಗಳನ್ನೂ ಜ್ಞಾಪಕ ಮಾಡಿಕೋ.
132:2b.PSA.132.002 ಅವನು ಕರ್ತನಿಗೆ ಆಣೆ ಇಟ್ಟು ಶಕ್ತಿ ಯುಳ್ಳ ಯಾಕೋಬನ ದೇವರಿಗೆ ಪ್ರಮಾಣಮಾಡಿ ಕೊಂಡದ್ದೇನಂದರೆ--
132:3b.PSA.132.003 ಕರ್ತನಿಗೆ ಒಂದು ಸ್ಥಳವನ್ನೂ ಯಾಕೋಬನ ದೇವರಿಗೆ ನಿವಾಸಗಳನ್ನೂ ನಾನು ಕಂಡುಕೊಳ್ಳುವ ವರೆಗೆ ನಿಶ್ಚಯವಾಗಿ
132:4b.PSA.132.004 ನನ್ನ ಮನೆಯ ಗುಡಾರದಲ್ಲಿ ಸೇರೆನು; ನನ್ನ ಮಂಚದ ಹಾಸಿಗೆಯನ್ನು ಏರೆನು;
132:5b.PSA.132.005 ನನ್ನ ಕಣ್ಣುಗಳಿಗೆ ನಿದ್ದೆಯನ್ನೂ ನನ್ನ ರೆಪ್ಪೆ ಗಳಿಗೆ ತೂಕಡಿಕೆಯನ್ನೂ ಕೊಡೆನು ಎಂಬದು.
132:6b.PSA.132.006 ಇಗೋ, ಎಫ್ರಾತದಲ್ಲಿ ಅದನ್ನು ಕೇಳಿದೆವು; ಅಡವಿಯ ಬೈಲುಗಳಲ್ಲಿ ಅದನ್ನು ಕಂಡುಕೊಂಡೆವು.
132:7b.PSA.132.007 ನಾವು ಆತನ ಗುಡಾರಗಳಿಗೆ ಹೋಗಿ ಆತನ ಪಾದಪೀಠದಲ್ಲಿ ಆರಾಧಿಸೋಣ.
132:8b.PSA.132.008 ಓ ಕರ್ತನೇ, ನೀನು ಬಲವುಳ್ಳ ನಿನ್ನ ಮಂಜೂಷದೊಂದಿಗೆ ನಿನ್ನ ವಿಶ್ರಾಂತಿಗೆ ಎದ್ದೇಳು.
132:9b.PSA.132.009 ನಿನ್ನ ಯಾಜಕರು ನೀತಿಯನ್ನು ಹೊದ್ದು ಕೊಳ್ಳಲಿ; ಪರಿಶುದ್ಧರು ಉತ್ಸಾಹಧ್ವನಿ ಮಾಡಲಿ.
132:10b.PSA.132.010 ನಿನ್ನ ಸೇವಕನಾದ ದಾವೀದನ ನಿಮಿತ್ತ ನಿನ್ನ ಅಭಿಷಿಕ್ತನ ಮುಖವನ್ನು ತಿರುಗಿಸಬೇಡ.
132:11b.PSA.132.011 ಕರ್ತನು ದಾವೀದನಿಗೆ ಸತ್ಯದ ಆಣೆ ಇಟ್ಟಿದ್ದಾನೆ; ಅದರಿಂದ ತಿರುಗಿಕೊಳ್ಳನು; ಅದು--ನಿನ್ನ ಸಂತಾನ ವನ್ನು ನಿನ್ನ ಸಿಂಹಾಸನದ ಮೇಲೆ ಇರಿಸು ವದು.
132:12b.PSA.132.012 ನಿನ್ನ ಮಕ್ಕಳಿಗೆ ನಾನು ಕಲಿಸುವ ನನ್ನ ಒಡಂಬಡಿಕೆಯನ್ನೂ ನನ್ನ ಸಾಕ್ಷಿಯನ್ನೂ ಕೈಕೊಂಡರೆ ಅವರ ಮಕ್ಕಳು ಸಹ ಎಂದೆಂದಿಗೂ ನಿನ್ನ ಸಿಂಹಾಸನ ದಲ್ಲಿ ಕೂಡ್ರುವರು.
132:13b.PSA.132.013 ಕರ್ತನು ಚೀಯೋನನ್ನು ಆದುಕೊಂಡು ಅದನ್ನು ತನ್ನ ವಾಸಕ್ಕಾಗಿ ಅಪೇಕ್ಷಿಸಿದ್ದಾನೆ.
132:14b.PSA.132.014 ಇದೇ ಎಂದೆಂದಿಗೂ ನನ್ನ ವಿಶ್ರಾಂತಿಯು; ಇಲ್ಲೇ ವಾಸಿಸುವೆನು; ಇದನ್ನು ನಾನು ಅಪೇಕ್ಷಿಸಿದ್ದೇನೆ.
132:15b.PSA.132.015 ಅದರ ಆದಾಯವನ್ನು ಬಹಳವಾಗಿ ಆಶೀರ್ವದಿ ಸುವೆನು; ಆದರೆ ಬಡವರನ್ನು ರೊಟ್ಟಿಯಿಂದ ತೃಪ್ತಿ ಪಡಿಸುವೆನು.
132:16b.PSA.132.016 ಅದರ ಯಾಜಕರಿಗೆ ರಕ್ಷಣೆಯನ್ನೂ ಹೊದಿಸುವೆನು; ಅದರ ಪರಿಶುದ್ಧರು ಗಟ್ಟಿಯಾಗಿ ಉತ್ಸಾಹ ಧ್ವನಿಮಾಡುವರು.
132:17b.PSA.132.017 ಅಲ್ಲಿ ದಾವೀದನಿಗೆ ಕೊಂಬನ್ನು ಮೊಳಿಸುವೆನು; ನನ್ನ ಅಭಿಷಿಕ್ತನಿಗೆ ದೀಪವನ್ನು ಸಿದ್ಧಮಾಡಿದ್ದೇನೆ.ಅವನ ಶತ್ರುಗಳಿಗೆ ನಾಚಿಕೆಯನ್ನು ಹೊದಿಸುವೆನು; ಆದರೆ ಅವನ ಮೇಲೆ ಅವನ ಕಿರೀಟವು ಶೋಭಿಸುವದು ಎಂದು ಹೇಳಿದ್ದಾನೆ.
132:18b.PSA.132.018 ಅವನ ಶತ್ರುಗಳಿಗೆ ನಾಚಿಕೆಯನ್ನು ಹೊದಿಸುವೆನು; ಆದರೆ ಅವನ ಮೇಲೆ ಅವನ ಕಿರೀಟವು ಶೋಭಿಸುವದು ಎಂದು ಹೇಳಿದ್ದಾನೆ.
133
133:1b.PSA.133.001 ಇಗೋ, ಸಹೋದರರು ಒಂದಾಗಿ ವಾಸಮಾಡುವದು ಎಷ್ಟೋಒಳ್ಳೇದು! ಎಷ್ಟೋ ರಮ್ಯವಾದದ್ದು!
133:2b.PSA.133.002 ಅದು ತಲೆಯ ಮೇಲಿದ್ದು ಗಡ್ಡದ ಮೇಲೆ ಅಂದರೆ ಆರೋನನ ಗಡ್ಡದ ಮೇಲೆ ಇಳಿದು ಅವನ ವಸ್ತ್ರಗಳ ಅಂಚಿನ ವರೆಗೂ ಇಳಿಯುವ ಶ್ರೇಷ್ಠ ತೈಲದ ಹಾಗೆಯೂಚೀಯೋನಿನ ಪರ್ವತಗಳ ಮೇಲೆ ಬೀಳುವ ಹೆರ್ಮೋನಿನ ಮಂಜಿನ ಹಾಗೆಯೂ ಅದೆ; ಅಲ್ಲಿ ಕರ್ತನು ಆಶೀರ್ವಾದವನ್ನೂ ಯುಗಯುಗಕ್ಕಿರುವ ಜೀವವನ್ನೂ ಆಜ್ಞಾಪಿಸಿದ್ದಾನೆ.
133:3b.PSA.133.003 ಚೀಯೋನಿನ ಪರ್ವತಗಳ ಮೇಲೆ ಬೀಳುವ ಹೆರ್ಮೋನಿನ ಮಂಜಿನ ಹಾಗೆಯೂ ಅದೆ; ಅಲ್ಲಿ ಕರ್ತನು ಆಶೀರ್ವಾದವನ್ನೂ ಯುಗಯುಗಕ್ಕಿರುವ ಜೀವವನ್ನೂ ಆಜ್ಞಾಪಿಸಿದ್ದಾನೆ.
134
134:1b.PSA.134.001 ಇಗೋ, ಕರ್ತನ ಆಲಯದಲ್ಲಿ ಪ್ರತಿ ರಾತ್ರಿ ನಿಲ್ಲುವವರಾದ ಕರ್ತನ ಸೇವಕರೆ ಎಲ್ಲಾ ಕರ್ತನನ್ನು ಸ್ತುತಿಸಿರಿ.
134:2b.PSA.134.002 ನಿಮ್ಮ ಕೈಗಳನ್ನು ಪರಿಶುದ್ಧ ಸ್ಥಳದಲ್ಲಿ ಎತ್ತಿ ಕರ್ತನನ್ನು ಸ್ತುತಿಸಿರಿ.ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನು ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.
134:3b.PSA.134.003 ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನು ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.
135
135:1b.PSA.135.001 ಕರ್ತನನ್ನು ಸ್ತುತಿಸಿರಿ. ಕರ್ತನ ಹೆಸರನ್ನು ಸ್ತುತಿಸಿರಿ; ಕರ್ತನ ಆಲಯ ದಲ್ಲಿಯೂ
135:2b.PSA.135.002 ನಮ್ಮ ದೇವರ ಆಲಯದ ಅಂಗಳ ಗಳಲ್ಲಿಯೂ ನಿಲ್ಲುವ ಕರ್ತನ ಸೇವಕರೇ, ಸ್ತುತಿಸಿರಿ.
135:3b.PSA.135.003 ಕರ್ತನನ್ನು ಸ್ತುತಿಸಿರಿ; ಕರ್ತನು ಒಳ್ಳೆಯವನು; ಆತನ ಹೆಸರಿಗೆ ಸ್ತುತಿಗಳನ್ನು ಹಾಡಿರಿ; ಅದು ರಮ್ಯ ವಾದದ್ದು.
135:4b.PSA.135.004 ಕರ್ತನು ಯಾಕೋಬನನ್ನು ತನಗೋ ಸ್ಕರವೂ ಇಸ್ರಾಯೇಲನ್ನು ತನ್ನ ಅಸಾಮಾನ್ಯವಾದ ಸಂಪತ್ತಾಗಿಯೂ ಆದುಕೊಂಡಿದ್ದಾನೆ.
135:5b.PSA.135.005 ಕರ್ತನು ದೊಡ್ಡವನು; ನಮ್ಮ ಕರ್ತನು ಎಲ್ಲಾ ದೇವರುಗಳಿ ಗಿಂತ ದೊಡ್ಡವನೆಂದು ನಾನು ತಿಳಿದಿದ್ದೇನೆ.
135:6b.PSA.135.006 ಕರ್ತನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ಸಮುದ್ರದ ಲ್ಲಿಯೂ ಎಲ್ಲಾ ಅಗಾಧಗಳಲ್ಲಿಯೂ ತಾನು ಅಪೇಕ್ಷಿಸು ವದನ್ನೆಲ್ಲಾ ಮಾಡುತ್ತಾನೆ.
135:7b.PSA.135.007 ಭೂಮಿಯ ಅಂತ್ಯಗಳಿಂದ ಮೋಡಗಳನ್ನು ಏಳ ಮಾಡಿ, ಮಳೆಗೋಸ್ಕರ ಮಿಂಚು ಗಳನ್ನು ಮಾಡಿ, ಗಾಳಿಯನ್ನು ತನ್ನ ಉಗ್ರಾಣಗಳಿಂದ ಹೊರಗೆ ಬರಮಾಡುತ್ತಾನೆ.
135:8b.PSA.135.008 ಆತನು ಐಗುಪ್ತದ ಚೊಚ್ಚಲಾದವುಗಳನ್ನು, ಮನು ಷ್ಯರು ಮೊದಲುಗೊಂಡು ಪಶುಗಳ ವರೆಗೂ ಹೊಡೆ ದನು.
135:9b.PSA.135.009 ಐಗುಪ್ತವೇ, ನಿನ್ನ ಮಧ್ಯದಲ್ಲಿ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಫರೋಹನಿಗೂ ಅವನ ಸಕಲ ಸೇವಕರಿಗೂ ವಿರೋಧವಾಗಿ ಕಳುಹಿಸಿದನು.
135:10b.PSA.135.010 ಆತನು ದೊಡ್ಡ ಜನಾಂಗಗಳನ್ನೂ ಬಲವಾದ ಅರಸುಗಳನ್ನೂ ಕೊಂದುಹಾಕಿದನು.
135:11b.PSA.135.011 ಅಮೋರಿ ಯರ ಅರಸನಾದ ಸೀಹೋನನನ್ನೂ ಬಾಷಾನಿನ ಅರಸನಾದ ಓಗನನ್ನೂ ಕಾನಾನಿನ ಎಲ್ಲಾ ರಾಜ್ಯ ಗಳನ್ನೂ ಹೊಡೆದನು.
135:12b.PSA.135.012 ಅವರ ದೇಶವನ್ನು ಬಾಧ್ಯತೆ ಯಾಗಿ ಅಂದರೆ ತನ್ನ ಜನರಾದ ಇಸ್ರಾಯೇಲಿಗೆ ಬಾಧ್ಯತೆಯಾಗಿ ಕೊಟ್ಟನು.
135:13b.PSA.135.013 ಓ ಕರ್ತನೇ, ನಿನ್ನ ಹೆಸರು ಶಾಶ್ವತವಾದದ್ದು, ಓ ಕರ್ತನೇ, ನಿನ್ನ ಜ್ಞಾಪಕವು ತಲತಲಾಂತರಕ್ಕೂ ಇರುವದು.
135:14b.PSA.135.014 ಕರ್ತನು ತನ್ನ ಜನರಿಗೆ ನ್ಯಾಯತೀರಿಸಿ ತನ್ನ ಸೇವಕರನ್ನು ಕನಿಕರಿಸುವನು.
135:15b.PSA.135.015 ಅನ್ಯಜನಾಂಗಗಳ ವಿಗ್ರಹಗಳು ಬೆಳ್ಳಿ ಬಂಗಾರ ದಿಂದ ಮಾಡಿದ ಮನುಷ್ಯನ ಕೈ ಕೆಲಸವಾಗಿವೆ.
135:16b.PSA.135.016 ಅವು ಗಳಿಗೆ ಬಾಯಿ ಉಂಟು, ಮಾತನಾಡುವದಿಲ್ಲ. ಕಣ್ಣುಗ ಳುಂಟು, ನೋಡುವುದಿಲ್ಲ.
135:17b.PSA.135.017 ಕಿವಿಗಳುಂಟು, ಕೇಳುವ ದಿಲ್ಲ. ಅವುಗಳ ಬಾಯಿಯಲ್ಲಿ ಶ್ವಾಸವೇನೂ ಇಲ್ಲ.
135:18b.PSA.135.018 ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸ ವಿಡುವವರೆಲ್ಲರೂ ಅವುಗಳ ಹಾಗೆಯೇ ಇದ್ದಾರೆ.
135:19b.PSA.135.019 ಇಸ್ರಾಯೇಲಿನ ಮನೆಯವರೇ, ಕರ್ತನನ್ನು ಸ್ತುತಿ ಸಿರಿ. ಆರೋನನ ಮನೆಯವರೇ, ಕರ್ತನನ್ನು ಸ್ತುತಿಸಿರಿ.
135:20b.PSA.135.020 ಲೇವಿಯ ಮನೆಯವರೇ, ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಭಯಪಡುವವರೇ, ಕರ್ತನನ್ನು ಸ್ತುತಿಸಿರಿ.ಯೆರೂಸಲೇಮಿನಲ್ಲಿ ವಾಸಿಸುವ ಕರ್ತನಿಗೆ ಚೀಯೋನಿನೊಳಗಿಂದ ಸ್ತುತಿಯುಂಟಾಗಲಿ. ಕರ್ತನನ್ನು ಸ್ತುತಿಸಿರಿ.
135:21b.PSA.135.021 ಯೆರೂಸಲೇಮಿನಲ್ಲಿ ವಾಸಿಸುವ ಕರ್ತನಿಗೆ ಚೀಯೋನಿನೊಳಗಿಂದ ಸ್ತುತಿಯುಂಟಾಗಲಿ. ಕರ್ತನನ್ನು ಸ್ತುತಿಸಿರಿ.
136
136:1b.PSA.136.001 ಕರ್ತನನ್ನು ಕೊಂಡಾಡಿರಿ, ಆತನು ಒಳ್ಳೆಯವನು; ಆತನ ಕರುಣೆಯು ಎಂದೆಂದಿಗೂ ಅದೆ.
136:2b.PSA.136.002 ದೇವರುಗಳ ದೇವರನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
136:3b.PSA.136.003 ಕರ್ತರ ಕರ್ತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
136:4b.PSA.136.004 ಒಬ್ಬನಾಗಿ ದೊಡ್ಡ ಅದ್ಭುತಗಳನ್ನು ಮಾಡುವಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
136:5b.PSA.136.005 ಆಕಾಶ ವನ್ನು ಜ್ಞಾನದಿಂದ ಉಂಟುಮಾಡಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
136:6b.PSA.136.006 ಭೂಮಿಯನ್ನು ನೀರಿನ ಮೇಲೆ ಹಾಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
136:7b.PSA.136.007 ದೊಡ್ಡ ಬೆಳಕುಗಳನ್ನು ಉಂಟು ಮಾಡಿದಾತ ನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
136:8b.PSA.136.008 ಹಗಲನ್ನು ಆಳುವದಕ್ಕೆ ಸೂರ್ಯನನ್ನು ಉಂಟು ಮಾಡಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
136:9b.PSA.136.009 ಇರುಳನ್ನು ಆಳುವದಕ್ಕೆ ಚಂದ್ರ ನಕ್ಷತ್ರಗಳನ್ನು ಉಂಟು ಮಾಡಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
136:10b.PSA.136.010 ಐಗುಪ್ತದ ಚೊಚ್ಚಲಾದವುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
136:11b.PSA.136.011 ಇಸ್ರಾಯೇಲನನ್ನು ಅವರ ಮಧ್ಯದಲ್ಲಿಂದ ಹೊರಗೆ ಬರಮಾಡಿದಾತನನ್ನು ಕೊಂಡಾಡಿರಿ; ಆತನ ಕರು ಣೆಯು ಎಂದೆಂದಿಗೂ ಅದೆ.
136:12b.PSA.136.012 ಬಲವಾದ ಕೈಯಿಂ ದಲೂ ಚಾಚಿದ ತೋಳಿನಿಂದಲೂ ಅವರನ್ನು ಹೊರಗೆ ತಂದನು; ಆತನ ಕರುಣೆಯು ಎಂದೆಂದಿಗೂ ಅದೆ.
136:13b.PSA.136.013 ಕೆಂಪು ಸಮುದ್ರವನ್ನು ವಿಭಾಗಿಸಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
136:14b.PSA.136.014 ಇಸ್ರಾಯೇಲನ್ನು ಅದರ ನಡುವೆ ನಡಿಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
136:15b.PSA.136.015 ಫರೋಹನನ್ನೂ ಅವನ ಸೈನ್ಯವನ್ನೂ ಕೆಂಪು ಸಮು ದ್ರದಲ್ಲಿ ಕೆಡವಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
136:16b.PSA.136.016 ತನ್ನ ಜನರನ್ನು ಅರಣ್ಯದಲ್ಲಿ ನಡೆಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
136:17b.PSA.136.017 ದೊಡ್ಡ ಅರಸುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
136:18b.PSA.136.018 ಪ್ರಸಿ ದ್ಧರಾದ ಅರಸುಗಳನ್ನು ಕೊಂದುಹಾಕಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
136:19b.PSA.136.019 ಅಮೋರಿಯರ ಅರಸನಾದ ಸೀಹೋನನು ಒಬ್ಬ; ಆತನ ಕರುಣೆಯು ಎಂದೆಂದಿಗೂ ಅದೆ.
136:20b.PSA.136.020 ಬಾಷಾ ನಿನ ಅರಸನಾದ ಓಗನೊಬ್ಬ; ಆತನ ಕರುಣೆಯು ಎಂದೆಂದಿಗೂ ಅದೆ.
136:21b.PSA.136.021 ಅವರ ದೇಶವನ್ನು ಬಾಧ್ಯತೆ ಯಾಗಿ ಕೊಟ್ಟಾತನನ್ನು ಕೊಂಡಾಡಿರಿ; ಆತನ ಕರು ಣೆಯು ಎಂದೆಂದಿಗೂ ಅದೆ.
136:22b.PSA.136.022 ತನ್ನ ಸೇವಕನಾದ ಇಸ್ರಾಯೇಲಿಗೆ ಅದು ಬಾಧ್ಯತೆಯಾಗಿದೆ; ಆತನ ಕರುಣೆಯು ಎಂದೆಂದಿಗೂ ಅದೆ.
136:23b.PSA.136.023 ನಮ್ಮ ದೀನಸ್ಥಿತಿಯಲ್ಲಿ ನಮ್ಮನ್ನು ನೆನಸಿ ಕೊಂಡಾ ತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂ ದಿಗೂ ಅದೆ.
136:24b.PSA.136.024 ನಮ್ಮ ವೈರಿಗಳಿಂದ ನಮ್ಮನ್ನು ಬಿಡಿ ಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
136:25b.PSA.136.025 ಮನುಷ್ಯರಿಗೆಲ್ಲಾ ಆಹಾರ ಕೊಡುವಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.ಪರಲೋಕದ ದೇವರನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
136:26b.PSA.136.026 ಪರಲೋಕದ ದೇವರನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
137
137:1b.PSA.137.001 ಬಾಬೆಲಿನ ನದಿಗಳ ಹತ್ತಿರ ನಾವು ಕೂತುಕೊಂಡು ಹೌದು, ಚೀಯೋ ನನ್ನು ಜ್ಞಾಪಕಮಾಡಿಕೊಂಡಾಗ ನಾವು ಅತ್ತೆವು.
137:2b.PSA.137.002 ಅದರ ನಡುವೆ ಇರುವ ನೀರವಂಜಿ ಮರಗಳ ಮೇಲೆ ನಮ್ಮ ಕಿನ್ನರಿಗಳನ್ನು ತೂಗಹಾಕಿದೆವು.
137:3b.PSA.137.003 ಅಲ್ಲಿ ನಮ್ಮನ್ನು ಸೆರೆಹಿಡಿದು ಹಾಳುಮಾಡಿದವರು--ನಮ್ಮ ಸಂತೋಷ ಕ್ಕಾಗಿ ಒಂದು ಹಾಡನ್ನು ಹಾಡಿರಿ ಅಂದರು.
137:4b.PSA.137.004 ಅನ್ಯದೇಶದಲ್ಲಿ ನಾವು ಕರ್ತನ ಹಾಡನ್ನು ಹಾಡು ವದು ಹೇಗೆ?
137:5b.PSA.137.005 ಯೆರೂಸಲೇಮೇ, ನಾನು ನಿನ್ನನ್ನು ಮರೆತುಬಿಟ್ಟರೆ ನನ್ನ ಬಲಗೈ ಮರೆತುಹೋಗಲಿ.
137:6b.PSA.137.006 ನಾನು ನಿನ್ನನ್ನು ಜ್ಞಾಪಕಮಾಡಿಕೊಳ್ಳದೆ ಯೆರೂಸ ಲೇಮನ್ನು ನನ್ನ ಮುಖ್ಯ ಸಂತೋಷಕ್ಕಿಂತ ಅದನ್ನು ಹೆಚ್ಚಿಸದಿದ್ದರೆ ನನ್ನ ನಾಲಿಗೆಯು ನನ್ನ ಅಂಗಳಕ್ಕೆ ಹತ್ತಲಿ.
137:7b.PSA.137.007 ಹಾಳುಮಾಡಿರಿ, ಅದರ ಅಸ್ತಿವಾರದ ವರೆಗೆ ಹಾಳು ಮಾಡಿರಿ ಎಂದು ಹೇಳಿದ ಎದೋಮಿನ ಮಕ್ಕಳನ್ನು ಯೆರೂಸಲೇಮಿನ ದಿವಸದಲ್ಲಿ ಕರ್ತನೇ, ಜ್ಞಾಪಕ ಮಾಡಿಕೋ.
137:8b.PSA.137.008 ಹಾಳಾಗಲಿಕ್ಕಿರುವ ಬಾಬೆಲಿನ ಮಗಳೇ, ನೀನು ನಮಗೆ ಮಾಡಿದ ಕಾರ್ಯಕ್ಕೆ ಪ್ರತೀಕಾರ ವನ್ನು ನಿನಗೆ ಸಲ್ಲಿಸುವವನು ಧನ್ಯನು.ನಿನ್ನ ಚಿಕ್ಕ ಕೂಸುಗಳನ್ನು ಹಿಡಿದು ಬಂಡೆಗಳ ಮೇಲೆ ಅಪ್ಪಳಿಸಿ ಬಿಡುವವನು ಧನ್ಯನು.
137:9b.PSA.137.009 ನಿನ್ನ ಚಿಕ್ಕ ಕೂಸುಗಳನ್ನು ಹಿಡಿದು ಬಂಡೆಗಳ ಮೇಲೆ ಅಪ್ಪಳಿಸಿ ಬಿಡುವವನು ಧನ್ಯನು.
138
138:1b.PSA.138.001 ನನ್ನ ಪೂರ್ಣ ಹೃದಯದಿಂದ ನಿನ್ನನ್ನು ಕೊಂಡಾಡುವೆನು; ದೇವರುಗಳ ಮುಂದೆ ನಿನ್ನನ್ನು ಕೀರ್ತಿಸುವೆನು.
138:2b.PSA.138.002 ನಿನ್ನ ಪರಿಶುದ್ಧ ಮಂದಿರದ ಕಡೆಗೆ ಅಡ್ಡ ಬಿದ್ದು ನಿನ್ನ ಪ್ರೀತಿ ಕರುಣೆಯ ನಿಮಿತ್ತವೂ ನಿನ್ನ ಸತ್ಯದ ನಿಮಿತ್ತವೂ ನಿನ್ನ ಹೆಸರನ್ನು ಕೊಂಡಾಡುವೆನು; ನಿನ್ನ ವಾಕ್ಯವನ್ನು ನಿನ್ನ ಎಲ್ಲಾ ಹೆಸರಿಗಿಂತಲೂ ಮಿಗಿಲಾಗಿ ಘನಪಡಿಸಿದ್ದೀ.
138:3b.PSA.138.003 ನಾನು ಕೂಗಿಕೊಂಡ ದಿವಸದಲ್ಲಿ ನೀನು ನನಗೆ ಉತ್ತರ ಕೊಟ್ಟೆ; ನನ್ನ ಪ್ರಾಣವನ್ನು ಬಲಪಡಿಸಿದ್ದೀ; ನನ್ನ ಪ್ರಾಣಕ್ಕೆ ಬಲವನ್ನು ಕೊಟ್ಟು ನನ್ನನ್ನು ಬಲಪಡಿಸಿದ್ದೀ.
138:4b.PSA.138.004 ಓ ಕರ್ತನೇ, ನಿನ್ನ ಬಾಯಿಯ ಮಾತುಗಳನ್ನು ಕೇಳುವಾಗ ಭೂಮಿಯ ಅರಸರೆಲ್ಲರೂ ನಿನ್ನನ್ನು ಕೊಂಡಾಡುವರು.
138:5b.PSA.138.005 ಹೌದು, ಅವರು ಕರ್ತನ ಮಾರ್ಗಗಳಲ್ಲಿ ಕರ್ತನ ಘನವು ದೊಡ್ಡದೆಂದು ಹಾಡುವರು.
138:6b.PSA.138.006 ಕರ್ತನು ಉನ್ನತನಾಗಿದ್ದರೂ ದೀನನನ್ನು ಗಮನಿ ಸುತ್ತಾನೆ. ಆದರೆ ಗರ್ವಿಷ್ಟನನ್ನು ದೂರದಿಂದ ತಿಳು ಕೊಳ್ಳುತ್ತಾನೆ.
138:7b.PSA.138.007 ನಾನು ಕಷ್ಟದ ಮಧ್ಯದಲ್ಲಿ ನಡೆದಾಗ್ಯೂ ನೀನು ನನ್ನನ್ನು ಬದುಕಿಸಿ ನನ್ನ ಶತ್ರುಗಳ ಕೋಪಕ್ಕೆ ವಿರೋಧವಾಗಿ ನಿನ್ನ ಕೈಯನ್ನು ಚಾಚುತ್ತೀ; ನಿನ್ನ ಬಲಗೈ ನನ್ನನ್ನು ರಕ್ಷಿಸುತ್ತದೆ.ಕರ್ತನು ನನಗಿ ರುವದನ್ನು ಸಿದ್ದಿಗೆ ತರುತ್ತಾನೆ; ಕರ್ತನೇ, ನಿನ್ನ ಕೃಪೆಯು ಎಂದೆಂದಿಗೂ ಅದೆ; ನಿನ್ನ ಸ್ವಂತ ಕೈಕೆಲಸಗಳನ್ನು ತೊರೆದುಬಿಡಬೇಡ.
138:8b.PSA.138.008 ಕರ್ತನು ನನಗಿ ರುವದನ್ನು ಸಿದ್ದಿಗೆ ತರುತ್ತಾನೆ; ಕರ್ತನೇ, ನಿನ್ನ ಕೃಪೆಯು ಎಂದೆಂದಿಗೂ ಅದೆ; ನಿನ್ನ ಸ್ವಂತ ಕೈಕೆಲಸಗಳನ್ನು ತೊರೆದುಬಿಡಬೇಡ.
139
139:1b.PSA.139.001 ಕರ್ತನೇ, ನನ್ನನ್ನು ಪರಿಶೋಧಿಸಿ ತಿಳುಕೊಂಡಿದ್ದೀ;
139:2b.PSA.139.002 ನಾನು ಕೂತು ಕೊಳ್ಳುವದನ್ನೂ ಏಳುವದನ್ನೂ ನೀನು ತಿಳುಕೊಂಡಿದ್ದೀ; ನನ್ನ ಆಲೋಚನೆಯನ್ನು ದೂರದಿಂದ ಗ್ರಹಿಸಿ ಕೊಂಡ್ಡಿದ್ದೀ;
139:3b.PSA.139.003 ನಾನು ನಡೆಯುವದನ್ನೂ ಮಲಗುವದನ್ನೂ ನೀನು ಶೋಧಿಸಿದ್ದೀ; ನನ್ನ ಮಾರ್ಗಗಳೆಲ್ಲಾ ನಿನಗೆ ಗೊತ್ತಾಗಿವೆ.
139:4b.PSA.139.004 ಇಗೋ, ಓ ಕರ್ತನೇ, ನನ್ನ ನಾಲಿಗೆಯಲ್ಲಿ ನಿನಗೆ ತಿಳಿಯದ ಮಾತು ಒಂದಾದರೂ ಇಲ್ಲ.
139:5b.PSA.139.005 ನೀನು ಹಿಂದೆಯೂ ಮುಂದೆಯೂ ನನ್ನನ್ನು ಸುತ್ತಿಕೊಂಡು ನಿನ್ನ ಕೈಯನ್ನು ನನ್ನ ಮೇಲೆ ಇಟ್ಟಿದ್ದೀ.
139:6b.PSA.139.006 ಇಂಥ ತಿಳುವಳಿಕೆಯು ನನಗೆ ಅತಿ ಅದ್ಭುತವಾಗಿದೆ; ಅದು ನನಗೆ ನಿಲುಕದಷ್ಟು ಉನ್ನತವಾಗಿದೆ.
139:7b.PSA.139.007 ನಾನು ನಿನ್ನ ಆತ್ಮಕ್ಕೆ ತಪ್ಪಿಸಿಕೊಂಡು ಎಲ್ಲಿಗೆ ಹೋಗಲಿ? ನಿನ್ನ ಸನ್ನಿಧಿಯಿಂದ ತಪ್ಪಿಸಿಕೊಂಡು ಎಲ್ಲಿಗೆ ಓಡಲಿ?
139:8b.PSA.139.008 ನಾನು ಆಕಾಶಕ್ಕೆ ಏರಿಹೋದರೆ ನೀನು ಅಲ್ಲಿ ಇದ್ದೀ; ಪಾತಾಳದಲ್ಲಿ ನನ್ನ ಹಾಸಿಗೆಯನ್ನು ಮಾಡಿಕೊಂಡರೆ ಅಗೋ, ನೀನು ಅಲ್ಲಿ ಇದ್ದೀ.
139:9b.PSA.139.009 ಉದಯದ ರೆಕ್ಕೆಗಳನ್ನು ಕಟ್ಟಿಕೊಂಡು ಸಮುದ್ರದ ಕಟ್ಟಕಡೆಯಲ್ಲಿ ವಾಸಮಾಡಿದರೆ
139:10b.PSA.139.010 ಅಲ್ಲಿಯೂ ನಿನ್ನ ಕೈ ನನ್ನನ್ನು ನಡಿಸಿ ನಿನ್ನ ಬಲಗೈ ನನ್ನನ್ನು ಹಿಡಿಯುವದು.
139:11b.PSA.139.011 ನಿಶ್ಚಯವಾಗಿ ಕತ್ತಲೆಯು ನನ್ನನ್ನು ಕವಿದು ಕೊಳ್ಳುವದೆಂದು ನಾನು ಹೇಳಿದರೆ ರಾತ್ರಿಯು ನನ್ನ ಸುತ್ತಲೂ ಬೆಳಕಾಗಿರುವದು.
139:12b.PSA.139.012 ಕರ್ತನೇ, ಕತ್ತಲೆಯು ನಿನಗೆ ಕಾಣದಂತೆ ಮುಚ್ಚುವದಿಲ್ಲ; ರಾತ್ರಿಯು ಹಗಲಿನ ಹಾಗೆ ಬೆಳಗುವದು; ಕತ್ತಲೂ ಬೆಳಕೂ ನಿನಗೆ ಒಂದೇ ಆಗಿವೆ.
139:13b.PSA.139.013 ನೀನು ನನ್ನ ಅಂತರಿಂದ್ರಿಯಗಳನ್ನು ರೂಪಿಸಿದ್ದೀ; ನನ್ನ ತಾಯಿಯ ಗರ್ಭದಲ್ಲಿ ನೀನು ನನ್ನನ್ನು ಮುಚ್ಚಿದ್ದೀ.
139:14b.PSA.139.014 ನಾನು ಭಯಭರಿತನಾಗಿಯೂ ಅದ್ಭುತ ವಾಗಿಯೂ ಮಾಡಲ್ಪಟ್ಟದ್ದರಿಂದ ನಿನ್ನನ್ನು ಕೊಂಡಾ ಡುತ್ತೇನೆ; ನಿನ್ನ ಕೆಲಸಗಳು ಅದ್ಭುತಗಳಾಗಿವೆ ಎಂದು ನನ್ನ ಮನಸ್ಸಿಗೆ ಚೆನ್ನಾಗಿ ತಿಳಿದಿದೆ;
139:15b.PSA.139.015 ನಾನು ಮರೆ ಯಲ್ಲಿ ಮಾಡಲ್ಪಟ್ಟಾಗಲೂ ಭೂಮಿಯ ಅಧೋ ಭಾಗಗಳಲ್ಲಿ ವಿಚಿತ್ರವಾಗಿ ಮಾಡಲ್ಪಟ್ಟಾಗಲೂ ನನ್ನ ಅಸ್ತಿತ್ವವು ನಿನಗೆ ಮರೆಯಾಗಿರಲಿಲ್ಲ.
139:16b.PSA.139.016 ಅದು ಇನ್ನೂ ಪೂರ್ಣವಾಗದಿರುವಾಗ ನನ್ನ ಅಸ್ತಿತ್ವವನ್ನು ನಿನ್ನ ಕಣ್ಣುಗಳು ನೋಡಿದವು; ನನ್ನ ಅಂಗಗಳೆಲ್ಲಾ ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು; ಅವುಗಳಲ್ಲಿ ಒಂದಾ ದರೂ ಇಲ್ಲದಿದ್ದಾಗ ಅವುಗಳು ರೂಪಿಸಲ್ಪಟ್ಟವು.
139:17b.PSA.139.017 ಓ ದೇವರೇ, ನಿನ್ನ ಆಲೋಚನೆಗಳು ನನಗೆ ಎಷ್ಟೋ ಪ್ರಿಯವಾಗಿವೆ! ಅವುಗಳ ಸಂಖ್ಯೆ ಎಷ್ಟೋ ದೊಡ್ಡ ದಾಗಿದೆ.
139:18b.PSA.139.018 ಅವುಗಳನ್ನು ಲೆಕ್ಕಿಸಿದರೆ ಮರಳು ಗಿಂತ ಹೆಚ್ಚಾಗಿವೆ; ನಾನು ಎಚ್ಚರವಾದಾಗ ಇನ್ನೂ ನಿನ್ನ ಬಳಿಯಲ್ಲಿಯೇ ಇದ್ದೇನೆ.
139:19b.PSA.139.019 ಓ ದೇವರೇ, ನಿಶ್ಚಯವಾಗಿ ನೀನು ದುಷ್ಟನನ್ನು ಕೊಂದುಹಾಕುವಿ; ರಕ್ತ ಪ್ರಿಯರೇ, ನನ್ನಿಂದ ತೊಲ ಗಿರಿ.
139:20b.PSA.139.020 ಅವರು ನಿನಗೆ ವಿರೋಧವಾಗಿ ಕೆಟ್ಟತನದಿಂದ ಮಾತನಾಡುತ್ತಾರೆ; ನಿನ್ನ ವೈರಿಗಳು ನಿನ್ನ ಹೆಸರನ್ನು ವ್ಯರ್ಥವಾಗಿ ಎತ್ತುತ್ತಾರೆ.
139:21b.PSA.139.021 ಓ ಕರ್ತನೇ, ನಾನು ನಿನ್ನನ್ನು ದ್ವೇಷಿಸುವವರನ್ನು ಹಗೆಮಾಡುವದಿಲ್ಲವೋ? ನಿನ್ನ ವಿರೋಧಿಗಳಿಗೆ ನಾನು ಬೇಸರಗೊಳ್ಳುವ ದಿಲ್ಲವೋ?
139:22b.PSA.139.022 ಪೂರ್ಣ ದ್ವೇಷದಿಂದ ಅವರನ್ನು ನಾನು ಹಗೆಮಾಡುತ್ತೇನೆ; ಅವರು ನನ್ನ ಶತ್ರುಗಳೆಂದು ನಾನು ಎಣಿಸುತ್ತೇನೆ.
139:23b.PSA.139.023 ದೇವರೇ, ನನ್ನನ್ನು ಶೋಧಿಸಿ ನನ್ನ ಹೃದಯವನ್ನು ತಿಳಿದುಕೋ; ನನ್ನನ್ನು ಪರೀಕ್ಷಿಸಿ ನನ್ನ ಆಲೋಚನೆಗಳನ್ನು ತಿಳಿದುಕೋ.ನನ್ನಲ್ಲಿ ದುಷ್ಟತ ನದ ಮಾರ್ಗ ಉಂಟೇನೋ ನೋಡಿ ನಿತ್ಯವಾದ ಮಾರ್ಗದಲ್ಲಿ ನನ್ನನ್ನು ನಡಿಸು.
139:24b.PSA.139.024 ನನ್ನಲ್ಲಿ ದುಷ್ಟತ ನದ ಮಾರ್ಗ ಉಂಟೇನೋ ನೋಡಿ ನಿತ್ಯವಾದ ಮಾರ್ಗದಲ್ಲಿ ನನ್ನನ್ನು ನಡಿಸು.
140
140:1b.PSA.140.001 ಓ ಕರ್ತನೇ, ಕೆಡುಕರಿಂದ ನನ್ನನ್ನು ಬಿಡಿಸು; ಬಲಾತ್ಕಾರಿಗಳಿಂದ ತಪ್ಪಿಸಿ ನನ್ನನ್ನು ಕಾಪಾಡು.
140:2b.PSA.140.002 ಅವರು ಹೃದಯದಲ್ಲಿ ಕೇಡು ಗಳನ್ನು ಕಲ್ಪಿಸುತ್ತಾರೆ; ಅವರು ತಪ್ಪದೆ ಯುದ್ಧಕ್ಕೆ ಕೂಡಿಕೊಳ್ಳುತ್ತಾರೆ.
140:3b.PSA.140.003 ತಮ್ಮ ನಾಲಿಗೆಗಳನ್ನು ಹಾವಿನ ಹಾಗೆ ಅವರು ಹದಮಾಡುತ್ತಾರೆ; ಸರ್ಪಗಳ ವಿಷವು ಅವರ ತುಟಿಗಳ ಕೆಳಗಿದೆ ಸೆಲಾ.
140:4b.PSA.140.004 ಓ ಕರ್ತನೇ, ದುಷ್ಟನ ಕೈಗಳಿಗೆ ನನ್ನನ್ನು ತಪ್ಪಿಸಿ ಕಾಪಾಡು; ಬಲಾತ್ಕಾರಿಯಿಂದ ನನ್ನನ್ನು ತಪ್ಪಿಸಿ ಕಾಯಿ; ನಾನು ಎಡವಿ ಬೀಳಬೇಕೆಂದು ಯೋಚಿಸುತ್ತಾರೆ.
140:5b.PSA.140.005 ಗರ್ವಿಷ್ಠರು ನನಗೆ ಉರ್ಲನ್ನೂ ಪಾಶಗಳನ್ನೂ ಅಡಗಿಸಿಟ್ಟಿದ್ದಾರೆ; ಬಲೆಯನ್ನು ದಾರಿಯ ಅಂಚಿನಲ್ಲಿ ಹಾಸಿದ್ದಾರೆ; ನೇಣುಗಳನ್ನು ನನಗೆ ಇಟ್ಟಿದ್ದಾರೆ ಸೆಲಾ.
140:6b.PSA.140.006 ನಾನು ಕರ್ತನಿಗೆ--ನೀನು ನನ್ನ ದೇವರಾಗಿದ್ದೀ; ಕರ್ತನೇ, ನನ್ನ ವಿಜ್ಞಾಪನೆಗಳ ಸ್ವರಕ್ಕೆ ಕಿವಿಗೊಡು.
140:7b.PSA.140.007 ನನ್ನ ರಕ್ಷಣೆಯ ಬಲವಾಗಿರುವ ಕರ್ತನಾದ ಓ ದೇವರೇ, ನನ್ನ ತಲೆಯನ್ನು ಯುದ್ಧದ ದಿವಸದಲ್ಲಿ ಮುಚ್ಚಿದ್ದೀ.
140:8b.PSA.140.008 ಓ ಕರ್ತನೇ, ದುಷ್ಟರ ಆಶೆಯನ್ನು ನೆರವೇರಿಸಬೇಡ; ಅವರು ಉನ್ನತಕ್ಕೇರುವ ಹಾಗೆ ಅವರ ಯುಕ್ತಿಯನ್ನು ಪೂರೈಸಬೇಡ ಎಂದು ಹೇಳಿದೆನು ಸೆಲಾ.
140:9b.PSA.140.009 ನನ್ನ ಸುತ್ತಲಿರುವವರ ವಿಷವೂ ಅವರ ತುಟಿಗಳ ಕಾಟವೂ ಅವರನ್ನು ಮುಚ್ಚಲಿ.
140:10b.PSA.140.010 ಉರಿ ಕೆಂಡಗಳು ಅವರ ಮೇಲೆ ಬೀಳಲಿ; ಬೆಂಕಿಯಲ್ಲಿಯೂ ಅವರು ಏಳಲಾರದ ಹಾಗೆ ಕುಣಿಯಲ್ಲಿಯೂ ಆತನು ಅವರನ್ನು ಕೆಡವಲಿ.
140:11b.PSA.140.011 ಕೆಟ್ಟದ್ದನ್ನು ಮಾತನಾಡುವವನು ಭೂಮಿ ಯಲ್ಲಿ ಸ್ಥಿರವಾಗದಿರಲಿ; ಬಲಾತ್ಕಾರಿಯನ್ನು ಕೆಡವು ವದಕ್ಕೆ ಕೇಡು ಅವನನ್ನು ಬೇಟೆಯಾಡುವದು.
140:12b.PSA.140.012 ಕರ್ತನು ದೀನನಿಗೆ ವ್ಯಾಜ್ಯವನ್ನೂ ಬಡವರಿಗೆ ನ್ಯಾಯವನ್ನೂ ತೀರಿಸುವನೆಂದು ನಾನು ಬಲ್ಲೆನು.ನಿಶ್ಚಯವಾಗಿ ನೀತಿವಂತರು ನಿನ್ನ ಹೆಸರಿಗೆ ಉಪಕಾರ ಸ್ತುತಿಯನ್ನು ಮಾಡುವರು; ಯಥಾರ್ಥರು ನಿನ್ನ ಸನ್ನಿಧಿಯಲ್ಲಿ ವಾಸಿಸುವರು.
140:13b.PSA.140.013 ನಿಶ್ಚಯವಾಗಿ ನೀತಿವಂತರು ನಿನ್ನ ಹೆಸರಿಗೆ ಉಪಕಾರ ಸ್ತುತಿಯನ್ನು ಮಾಡುವರು; ಯಥಾರ್ಥರು ನಿನ್ನ ಸನ್ನಿಧಿಯಲ್ಲಿ ವಾಸಿಸುವರು.
141
141:1b.PSA.141.001 ಕರ್ತನೇ, ನಿನ್ನನ್ನು ಕೂಗುತ್ತೇನೆ; ನನ್ನ ಬಳಿಗೆ ಬರಲು ತ್ವರೆಯಾಗಿ ಬಾ; ನಾನು ನಿನ್ನನ್ನು ಕರೆಯುವಾಗ, ನನ್ನ ಸ್ವರಕ್ಕೆ ಕಿವಿಗೊಡು.
141:2b.PSA.141.002 ನನ್ನ ಪ್ರಾರ್ಥನೆ ನಿನ್ನ ಮುಂದೆ ಧೂಪವಾಗಿಯೂ ನನ್ನ ಕೈ ಎತ್ತುವದು ಸಾಯಂಕಾಲದ ಬಲಿಯಾಗಿಯೂ ಸಿದ್ಧವಾಗಿರಲಿ.
141:3b.PSA.141.003 ಓ ಕರ್ತನೇ, ನನ್ನ ಬಾಯಿಗೆ ಕಾವ ಲಿಡು; ನನ್ನ ತುಟಿಗಳ ಕದವನ್ನು ಕಾಯಿ. ಅಪರಾಧ ಮಾಡುವ ಮನುಷ್ಯರ ಸಂಗಡ ದುಷ್ಟತ್ವದಿಂದ ಕರ್ಮಗಳನ್ನು ನಡಿಸುವ ಕೆಟ್ಟ ಕಾರ್ಯಕ್ಕೆ
141:4b.PSA.141.004 ನನ್ನ ಹೃದಯವನ್ನು ಲಾಲಿಸದೆ ಮಾಡು; ಅವರ ಸವಿ ಊಟಗಳನ್ನು ನಾನು ಉಣ್ಣುವದಿಲ್ಲ.
141:5b.PSA.141.005 ನೀತಿವಂತನು ನನ್ನನ್ನು ಹೊಡೆಯಲಿ; ಅದು ಕರುಣೆಯೇ; ಅವನು ನನ್ನನ್ನು ಗದರಿಸಲಿ; ಅದು ನನ್ನ ತಲೆಗೆ ಶ್ರೇಷ್ಠ ಎಣ್ಣೆಯೇ. ಅದನ್ನು ನನ್ನ ತಲೆ ಬೇಡವೆನ್ನದಿರಲಿ; ಆದರೆ ಇನ್ನೂ ಅವರ ಕೇಡುಗಳಲ್ಲಿ ನನ್ನ ಪ್ರಾರ್ಥನೆ ಇರುವದು.
141:6b.PSA.141.006 ಅವರ ನ್ಯಾಯಾ ಧಿಪತಿಗಳು ಬಂಡೆಯ ಸ್ಥಳಗಳಲ್ಲಿ ಕೆಡವಲ್ಪಡುವಾಗ ಅವರು ನನ್ನ ಮಾತುಗಳನ್ನು ಕೇಳುವರು; ಅವು ಸಿಹಿಯಾಗಿವೆ.
141:7b.PSA.141.007 ಭೂಮಿಯಲ್ಲಿ ಮರವನ್ನು ಕಡಿದು ಸೀಳುವವನ ಹಾಗೆ ನಮ್ಮ ಎಲುಬುಗಳು ಸಮಾಧಿಯ ಬಾಯಿಯ ಹತ್ತಿರ ಚದುರಿ ಅವೆ.
141:8b.PSA.141.008 ಕರ್ತನಾದ ಓ ದೇವರೇ, ನನ್ನ ಕಣ್ಣುಗಳು ನಿನ್ನ ಕಡೆಗೆ ಅವೆ; ನಿನ್ನನ್ನು ಆಶ್ರಯಿಸಿಕೊಂಡಿದ್ದೇನೆ; ನನ್ನ ಪ್ರಾಣವನ್ನು ದಿಕ್ಕಿಲ್ಲ ದಂತೆ ಬಿಡಬೇಡ.
141:9b.PSA.141.009 ಅವರು ನನಗೆ ಒಡ್ಡಿದ ಉರ್ಲಿ ನಿಂದಲೂ ಅಪರಾಧಿಗಳ ನೇಣುಗಳಿಂದಲೂ ನನ್ನನ್ನು ಕಾಪಾಡು.ನಾನು ತಪ್ಪಿಸಿಕೊಂಡು ಹೋಗುವಷ್ಟರಲ್ಲಿ ದುಷ್ಟರು ತಮ್ಮ ಬಲೆಗಳಲ್ಲಿ ಬೀಳಲಿ.
141:10b.PSA.141.010 ನಾನು ತಪ್ಪಿಸಿಕೊಂಡು ಹೋಗುವಷ್ಟರಲ್ಲಿ ದುಷ್ಟರು ತಮ್ಮ ಬಲೆಗಳಲ್ಲಿ ಬೀಳಲಿ.
142
142:1b.PSA.142.001 ನನ್ನ ಸ್ವರವೆತ್ತಿ ಕರ್ತನಿಗೆ ಮೊರೆಯಿಟ್ಟಿದ್ದೇನೆ ಸ್ವರವೆತ್ತಿ ನನ್ನ ಕರ್ತನಿಗೆ ವಿಜ್ಞಾಪನೆ ಮಾಡಿದ್ದೇನೆ.
142:2b.PSA.142.002 ಆತನ ಮುಂದೆ ನನ್ನ ಚಿಂತೆಯನ್ನು ಹೊಯ್ದಿದ್ದೇನೆ; ನನ್ನ ಇಕ್ಕಟ್ಟನ್ನು ಆತನ ಮುಂದೆ ತಿಳಿಸಿದ್ದೇನೆ.
142:3b.PSA.142.003 ನನ್ನ ಆತ್ಮವು ನನ್ನಲ್ಲಿ ಕುಂದಿ ಹೋದಾಗ ನೀನು ನನ್ನ ದಾರಿಯನ್ನು ತಿಳುಕೊಂಡಿದ್ದೀ; ನಾನು ನಡೆಯುವ ದಾರಿಯಲ್ಲಿ ಗುಪ್ತವಾಗಿ ನನಗೆ ಉರ್ಲನ್ನು ಒಡ್ಡಿದ್ದಾರೆ.
142:4b.PSA.142.004 ನನ್ನ ಬಲಗಡೆಯಲ್ಲಿ ನೋಡಿದೆನು; ನೋಡಿದಾಗ ನನ್ನನ್ನು ತಿಳಿಯುವವನು ಯಾವನೂ ಇಲ್ಲ. ಆಶ್ರಯವು ನನ್ನ ಬಳಿಯಿಂದ ತಪ್ಪಿಹೋಯಿತು; ನನ್ನ ಪ್ರಾಣಕ್ಕಾಗಿ ಚಿಂತಿಸುವವನು ಒಬ್ಬನೂ ಇಲ್ಲ.
142:5b.PSA.142.005 ಓ ಕರ್ತನೇ, ನಿನಗೆ ಮೊರೆಯಿಡುತ್ತೇನೆ, ನಾನು ಹೇಳುವದೇನಂದರೆ -- ನೀನು ನನ್ನ ಆಶ್ರಯವೂ ಜೀವಿತರ ದೇಶದಲ್ಲಿ ನನ್ನ ಪಾಲೂ ಆಗಿದ್ದೀ ಎಂಬದೇ.
142:6b.PSA.142.006 ನನ್ನ ಕೂಗನ್ನು ಆಲೈಸು; ನಾನು ಬಹಳ ಕುಂದಿ ಹೋಗಿದ್ದೇನೆ. ನನ್ನನ್ನು ಹಿಂಸಿಸುವವರಿಂದ ನನ್ನನ್ನು ಬಿಡಿಸು; ಅವರು ನನಗಿಂತ ಬಲವುಳ್ಳವರಾಗಿದ್ದಾರೆ.ನಿನ್ನ ಹೆಸರನ್ನು ಕೊಂಡಾಡುವ ಹಾಗೆ ನನ್ನ ಪ್ರಾಣ ವನ್ನು ಸೆರೆಯಿಂದ ಹೊರಗೆ ಬರಮಾಡು; ನೀತಿವಂತರು ನನ್ನನ್ನು ಮುತ್ತಿಕೊಳ್ಳುವರು; ನನಗೆ ನೀನು ಉಪಕಾರ ಮಾಡುವಿ.
142:7b.PSA.142.007 ನಿನ್ನ ಹೆಸರನ್ನು ಕೊಂಡಾಡುವ ಹಾಗೆ ನನ್ನ ಪ್ರಾಣ ವನ್ನು ಸೆರೆಯಿಂದ ಹೊರಗೆ ಬರಮಾಡು; ನೀತಿವಂತರು ನನ್ನನ್ನು ಮುತ್ತಿಕೊಳ್ಳುವರು; ನನಗೆ ನೀನು ಉಪಕಾರ ಮಾಡುವಿ.
143
143:1b.PSA.143.001 ಓ ಕರ್ತನೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ವಿಜ್ಞಾಪನೆಗಳಿಗೆ ಕಿವಿ ಗೊಡು; ನಿನ್ನ ನಂಬಿಗಸ್ತಿಕೆಯಲ್ಲಿಯೂ ನೀತಿಯಲ್ಲಿಯೂ ನನಗೆ ಉತ್ತರಕೊಡು.
143:2b.PSA.143.002 ನಿನ್ನ ಸೇವಕನನ್ನು ನ್ಯಾಯವಿಚಾರಣೆಗೆ ಗುರಿಮಾಡಬೇಡ; ಜೀವಿತರಲ್ಲಿ ಒಬ್ಬನಾದರೂ ನಿನ್ನ ಮುಂದೆ ನೀತಿವಂತನಾಗುವದಿಲ್ಲ.
143:3b.PSA.143.003 ಶತ್ರುವು ನನ್ನ ಪ್ರಾಣವನ್ನು ಹಿಂಸಿಸಿ ನನ್ನ ಜೀವವನ್ನು ನೆಲಕ್ಕೆ ಜಜ್ಜಿ ಬಹುಕಾಲದ ಹಿಂದೆ ಸತ್ತವರ ಹಾಗೆ, ಕತ್ತಲೆಯಲ್ಲಿ ನಾನು ವಾಸಿಸುವಂತೆ ಮಾಡಿದ್ದಾನೆ.
143:4b.PSA.143.004 ನನ್ನ ಆತ್ಮವು ನನ್ನಲ್ಲಿ ಕುಂದಿಹೋಗಿದೆ; ನನ್ನೊಳಗೆ ನನ್ನ ಹೃದಯವು ಹಾಳಾಗಿದೆ.
143:5b.PSA.143.005 ಪೂರ್ವಕಾಲದ ದಿವಸಗಳನ್ನು ಜ್ಞಾಪಕಮಾಡಿಕೊಂಡು ನಿನ್ನ ಎಲ್ಲಾ ಕ್ರಿಯೆಗಳಲ್ಲಿ ಧ್ಯಾನಮಾಡಿ, ನಿನ್ನ ಕೈಗಳ ಕೆಲಸವನ್ನು ಆಲೋಚಿಸುತ್ತೇನೆ.
143:6b.PSA.143.006 ನನ್ನ ಕೈಗಳನ್ನು ನಿನ್ನ ಕಡೆಗೆ ಚಾಚುತ್ತೇನೆ; ನನ್ನ ಪ್ರಾಣವು ದಾಹಗೊಂಡ ಭೂಮಿಯ ಹಾಗೆ ನಿನಗಾಗಿ ದಾಹಗೊಂಡಿದೆ.
143:7b.PSA.143.007 ಓ ಕರ್ತನೇ, ನನಗೆ ಬೇಗನೆ ಉತ್ತರಕೊಡು; ನನ್ನ ಪ್ರಾಣವು ಕುಂದಿಹೋಗಿದೆ; ನಾನು ಕುಣಿಯಲ್ಲಿ ಇಳಿಯುವವರಿಗೆ ಸಮಾನವಾಗದ ಹಾಗೆ ನಿನ್ನ ಮುಖ ವನ್ನು ನನಗೆ ಮರೆಮಾಡಬೇಡ.
143:8b.PSA.143.008 ಹೊತ್ತಾರೆಯಲ್ಲಿ ನಿನ್ನ ಪ್ರೀತಿಕರುಣೆಯನ್ನು ನಾನು ಕೇಳುವಂತೆ ಮಾಡು; ನಿನ್ನಲ್ಲಿ ಭರವಸವಿಟ್ಟಿದ್ದೇನೆ; ನಾನು ಹೋಗಬೇಕಾದ ಮಾರ್ಗವನ್ನು ನನಗೆ ತಿಳಿಯಪಡಿಸು; ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ.
143:9b.PSA.143.009 ಓ ಕರ್ತನೇ, ನನ್ನ ಶತ್ರುಗಳಿಂದ ನನ್ನನ್ನು ಬಿಡಿಸು; ನಾನು ಅಡಗಿಕೊಳ್ಳು ವಂತೆ ನಿನ್ನ ಬಳಿಗೆ ಓಡುತ್ತೇನೆ.
143:10b.PSA.143.010 ನಿನ್ನ ಚಿತ್ತದಂತೆ ಮಾಡುವದಕ್ಕೆ ನನಗೆ ಬೋಧಿಸು; ನೀನು ನನ್ನ ದೇವರು; ಒಳ್ಳೇದಾಗಿರುವ ನಿನ್ನ ಆತ್ಮವು ನನ್ನನ್ನು ನೆಟ್ಟನೆಯ ಭೂಮಿಯಲ್ಲಿ ನಡಿಸಲಿ.
143:11b.PSA.143.011 ಓ ಕರ್ತನೇ, ನಿನ್ನ ಹೆಸ ರಿನ ನಿಮಿತ್ತ ನನ್ನನ್ನು ಬದುಕಿಸಿ ನಿನ್ನ ನೀತಿಗನುಸಾರ ವಾಗಿ ನನ್ನ ಪ್ರಾಣವನ್ನು ಇಕ್ಕಟ್ಟಿನೊಳಗಿಂದ ಹೊರಗೆ ಬರಮಾಡು.ನಿನ್ನ ಕರುಣೆಯಿಂದ ನನ್ನ ಶತ್ರು ಗಳನ್ನು ಸಂಹರಿಸಿ ನನ್ನ ಪ್ರಾಣವನ್ನು ಸಂಕಟ ಪಡಿಸುವವರನ್ನೆಲ್ಲಾ ನಾಶಮಾಡು; ನಾನು ನಿನ್ನ ಸೇವಕನಾಗಿದ್ದೇನೆ.
143:12b.PSA.143.012 ನಿನ್ನ ಕರುಣೆಯಿಂದ ನನ್ನ ಶತ್ರು ಗಳನ್ನು ಸಂಹರಿಸಿ ನನ್ನ ಪ್ರಾಣವನ್ನು ಸಂಕಟ ಪಡಿಸುವವರನ್ನೆಲ್ಲಾ ನಾಶಮಾಡು; ನಾನು ನಿನ್ನ ಸೇವಕನಾಗಿದ್ದೇನೆ.
144
144:1b.PSA.144.001 ನನ್ನ ಕೈಗಳಿಗೆ ಕಾಳಗವನ್ನು, ನನ್ನ ಬೆರಳುಗಳಿಗೆ ಯುದ್ಧವನ್ನು, ಕಲಿಸಿದ ನನ್ನ ಬಲವಾಗಿರುವ ಕರ್ತನಿಗೆ ಸ್ತೋತ್ರವಾಗಲಿ.
144:2b.PSA.144.002 ಆತನು ನನ್ನ ಒಳ್ಳೇತನವೂ ನನ್ನ ಕೋಟೆಯೂ ನನ್ನ ಎತ್ತರವಾದ ದುರ್ಗವೂ ನನ್ನನ್ನು ತಪ್ಪಿಸುವವನೂ ನನ್ನ ಭರವಸವೂ ನನ್ನ ಗುರಾಣಿಯೂ ನನ್ನ ಜನರನ್ನು ನನಗೆ ವಶಮಾಡುವಾತನೂ ಆಗಿದ್ದಾನೆ.
144:3b.PSA.144.003 ಕರ್ತನೇ, ನೀನು ಮನುಷ್ಯನನ್ನು ತಿಳುಕೊಳ್ಳುವ ಹಾಗೆ ಅವನು ಎಷ್ಟರವನು? ನೀನು ಅವನನ್ನು ಲಕ್ಷಿಸುವ ಹಾಗೆ ನರಪುತ್ರನು ಎಷ್ಟರವನು?
144:4b.PSA.144.004 ಮನುಷ್ಯನು ವ್ಯರ್ಥತೆಗೆ ಸಮಾನನಾಗಿದ್ದಾನೆ; ಅವನ ದಿವಸಗಳು ಕಳೆದುಹೋಗುವ ನೆರಳಿನ ಹಾಗಿವೆ.
144:5b.PSA.144.005 ಓ ಕರ್ತನೇ, ನಿನ್ನ ಆಕಾಶಗಳನ್ನು ತಗ್ಗಿಸಿ ಇಳಿದು ಬಾ; ಬೆಟ್ಟಗಳನ್ನು ಮುಟ್ಟು; ಆಗ ಅವು ಹೊಗೆ ಹಾಯುವವು.
144:6b.PSA.144.006 ಮಿಂಚನ್ನು ಮಿಂಚಿಸಿ ಅವರನ್ನು ಚದರಿಸು; ನಿನ್ನ ಬಾಣಗಳನ್ನು ಎಸೆದು ಅವರನ್ನು ನಾಶಮಾಡು.
144:7b.PSA.144.007 ನಿನ್ನ ಕೈಯನ್ನು ಉನ್ನತದಿಂದ ಚಾಚಿ, ಮಹಾಜಲಗಳಿಂದಲೂ ಅನ್ಯರ ಮಕ್ಕಳ ಕೈಯಿಂದಲೂ ನನ್ನನ್ನು ತಪ್ಪಿಸು, ನನ್ನನ್ನು ಬಿಡಿಸು.
144:8b.PSA.144.008 ಅವರ ಬಾಯಿ ವ್ಯರ್ಥತ್ವವನ್ನು ನುಡಿಯುವದು, ಅವರ ಬಲಗೈ ಮೋಸದ ಬಲಗೈ ಆಗಿದೆ.
144:9b.PSA.144.009 ಓ ದೇವರೇ, ನಾನು ಹೊಸ ಹಾಡನ್ನು ನಿನಗೆ ಹಾಡುವೆನು; ಹತ್ತು ತಂತಿಗಳ ವೀಣೆಯಿಂದ ನಿನ್ನನ್ನು ಕೀರ್ತಿಸುವೆನು.
144:10b.PSA.144.010 ಅರಸುಗಳಿಗೆ ರಕ್ಷಣೆಯನ್ನು ಕೊಡು ವಾತನೇ, ನಿನ್ನ ಸೇವಕನಾದ ದಾವೀದನನ್ನು ಕೇಡಿನ ಕತ್ತಿಯಿಂದ ತಪ್ಪಿಸುವಾತನೇ,
144:11b.PSA.144.011 ಅನ್ಯರ ಮಕ್ಕಳ ಕೈಯಿಂದ ನನ್ನನ್ನು ತಪ್ಪಿಸಿ, ನನ್ನನ್ನು ಬಿಡಿಸು; ಅವರ ಬಾಯಿ ವ್ಯರ್ಥತ್ವವನ್ನು ನುಡಿಯುವದು; ಅವರ ಬಲಗೈ ಮೋಸದ ಬಲಗೈ ಆಗಿದೆ.
144:12b.PSA.144.012 ನಮ್ಮ ಗಂಡು ಮಕ್ಕಳು ಸಸಿಗಳ ಹಾಗೆ ತಮ್ಮ ಯೌವನದಲ್ಲಿ ಬೆಳೆದವರಾಗಿರಲಿ; ನಮ್ಮ ಹೆಣ್ಣು ಮಕ್ಕಳು ಅರಮನೆಯ ಕಟ್ಟುವಿಕೆಯ ಪ್ರಕಾರ ಕೆತ್ತಲ್ಪಟ್ಟ ಮೂಲೆಯ ಕಲ್ಲುಗಳ ಹಾಗಿರಲಿ.
144:13b.PSA.144.013 ನಮ್ಮ ಉಗ್ರಾಣಗಳು ತುಂಬಿ ನಾನಾ ವಿಧವಾದ ಪದಾರ್ಥಗಳನ್ನು ಹಂಚಲಿ; ನಮ್ಮ ಕುರಿಮಂದೆಗಳು ಸಹಸ್ರ ಸಹಸ್ರವಾಗಿ ನಮ್ಮ ಬೀದಿಗಳಲ್ಲಿ ಹೆಚ್ಟಲಿ.
144:14b.PSA.144.014 ನಮ್ಮ ಎತ್ತುಗಳು ಪ್ರಯಾಸಪಡುವದಕ್ಕೆ ಬಲವುಳ್ಳ ವುಗಳಾಗಲಿ; ಒಳಗೆ ನುಗ್ಗುವದಾಗಲಿ ಹೊರಗೆ ಹೋಗು ವದಾಗಲಿ ಆಗದಿರಲಿ; ನಮ್ಮ ಬೀದಿಗಳಲ್ಲಿ ದೂರು ವದು ಇಲ್ಲದಿರಲಿ.ಹೀಗಿರುವ ಜನರು ಧನ್ಯರು; ಕರ್ತನು ತಮಗೆ ದೇವರಾಗಿರುವ ಜನರು ಧನ್ಯರು.
144:15b.PSA.144.015 ಹೀಗಿರುವ ಜನರು ಧನ್ಯರು; ಕರ್ತನು ತಮಗೆ ದೇವರಾಗಿರುವ ಜನರು ಧನ್ಯರು.
145
145:1b.PSA.145.001 ಓ ಅರಸನಾದ ನನ್ನ ದೇವರೇ, ನಿನ್ನನ್ನು ಘನಪಡಿಸುವೆನು; ನಿನ್ನ ಹೆಸರನ್ನು ಎಂದೆಂದಿಗೂ ಸ್ತುತಿಸುವೆನು.
145:2b.PSA.145.002 ಪ್ರತಿದಿನ ನಿನ್ನನ್ನು ಸ್ತುತಿಸುವೆನು; ಎಂದೆಂದಿಗೂ ನಿನ್ನ ಹೆಸರನ್ನು ಸ್ತುತಿಸುವೆನು.
145:3b.PSA.145.003 ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸಲ್ಪಡತಕ್ಕವನೂ ಆಗಿದ್ದಾನೆ; ಆತನ ದೊಡ್ಡಸ್ತಿಕೆಯು ಅಶೋಧ್ಯವಾದದ್ದು.
145:4b.PSA.145.004 ತಲಾಂತರಕ್ಕೆ ಇನ್ನೊಂದು ತಲಾಂತರವು ನಿನ್ನ ಕೆಲಸಗಳನ್ನು ಪ್ರಕಟಿಸುತ್ತದೆ; ನಿನ್ನ ಪರಾಕ್ರಮಗಳನ್ನು ತಿಳಿಸುತ್ತಾರೆ.
145:5b.PSA.145.005 ನಿನ್ನ ಮಹಿಮೆಯ ಘನದ ಪ್ರಭೆಯ ವಿಷಯ ವಾಗಿಯೂ ನಿನ್ನ ಅದ್ಭುತಕಾರ್ಯಗಳ ವಿಷಯ ವಾಗಿಯೂ
145:6b.PSA.145.006 ನಿನ್ನ ಭಯಂಕರವಾದ ತ್ರಾಣದ ವಿಷಯ ವಾಗಿಯೂ ಅವರು ಹೇಳುವರು; ನಿನ್ನ ಮಹತ್ವವನ್ನು ನಾನು ಸಾರುವೆನು.
145:7b.PSA.145.007 ನಿನ್ನ ಬಹು ಒಳ್ಳೇತನದ ಜ್ಞಾಪಕವನ್ನು ಅವರು ನುಡಿಯುವರು; ನಿನ್ನ ನೀತಿಯ ನಿಮಿತ್ತ ಉತ್ಸಾಹಧ್ವನಿ ಮಾಡುವರು.
145:8b.PSA.145.008 ಕರ್ತನು ಕೃಪಾಳುವೂ ಅಂತಃಕರಣವೂ ದೀರ್ಘಶಾಂತಿಯೂ ಮಹಾಕರುಣೆಯುಳ್ಳವನೂ ಆಗಿದ್ದಾನೆ.
145:9b.PSA.145.009 ಕರ್ತನು ಸರ್ವರಿಗೂ ಒಳ್ಳೆಯವನು; ಆತನ ಅಂತಃಕರಣವು ಆತನ ಎಲ್ಲಾ ಕೆಲಸಗಳ ಮೇಲೆ ಅದೆ.
145:10b.PSA.145.010 ಓ ಕರ್ತನೇ, ನಿನ್ನ ಕೆಲಸಗಳೆಲ್ಲಾ ನಿನ್ನನ್ನು ಕೊಂಡಾಡುವವು; ನಿನ್ನ ಪರಿಶುದ್ಧರು ನಿನ್ನನ್ನು ಸ್ತುತಿಸುವರು.
145:11b.PSA.145.011 ನಿನ್ನ ರಾಜ್ಯದ ಘನವನ್ನು ಹೇಳುವರು; ನಿನ್ನ ಪರಾಕ್ರಮವನ್ನು ನುಡಿಯುವರು.
145:12b.PSA.145.012 ಮನುಷ್ಯನ ಮಕ್ಕಳಿಗೆ ಆತನ ಪರಾಕ್ರಮ ಕ್ರಿಯೆಗಳನ್ನೂ ಆತನ ರಾಜ್ಯದ ಪ್ರಭೆಯ ಘನವನ್ನೂ ತಿಳಿಯಪಡಿಸುವರು.
145:13b.PSA.145.013 ನಿನ್ನ ರಾಜ್ಯವು ಶಾಶ್ವತವಾದ ರಾಜ್ಯವಾಗಿದೆ; ನಿನ್ನ ದೊರೆತನವು ಎಲ್ಲಾ ತಲತಲಾಂತರಗಳಲ್ಲಿ ಇರುವದು.
145:14b.PSA.145.014 ಕರ್ತನು ಬೀಳುವವರೆಲ್ಲರನ್ನು ಉದ್ಧಾರಮಾಡುತ್ತಾನೆ; ತಗ್ಗಿಸಿ ಕೊಳ್ಳುವವರೆಲ್ಲರನ್ನು ಎತ್ತುತ್ತಾನೆ.
145:15b.PSA.145.015 ಎಲ್ಲರ ಕಣ್ಣುಗಳು ನಿನಗೆ ಕಾದುಕೊಳ್ಳುತ್ತವೆ; ನೀನು ಅವರಿಗೆ ಅವರ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುತ್ತೀ.
145:16b.PSA.145.016 ನಿನ್ನ ಕೈ ತೆರೆದು ಎಲ್ಲಾ ಜೀವಿಗಳ ಇಷ್ಟವನ್ನು ತೃಪ್ತಿಪಡಿ ಸುತ್ತೀ.
145:17b.PSA.145.017 ಕರ್ತನು ತನ್ನ ಎಲ್ಲಾ ಮಾರ್ಗಗಳಲ್ಲಿ ನೀತಿವಂತನೂ ತನ್ನ ಎಲ್ಲಾ ಕೆಲಸಗಳಲ್ಲಿ ಪರಿಶುದ್ಧನೂ ಆಗಿದ್ದಾನೆ.
145:18b.PSA.145.018 ಕರ್ತನಿಗೆ ಮೊರೆಯಿಡುವವರು ಯಥಾರ್ಥವಾಗಿ ಮೊರೆಯಿಡುವದಾದರೆ ಆತನು ಹತ್ತಿರವಾಗಿಯೇ ಇದ್ದಾನೆ.
145:19b.PSA.145.019 ತನಗೆ ಭಯಪಡುವವರ ಇಷ್ಟವನ್ನು ತೀರಿಸುತ್ತಾನೆ. ಅವರ ಮೊರೆಯನ್ನು ಕೇಳಿ ಅವರನ್ನು ರಕ್ಷಿಸುತ್ತಾನೆ.
145:20b.PSA.145.020 ಕರ್ತನು ತನ್ನನ್ನು ಪ್ರೀತಿ ಮಾಡುವ ವರೆಲ್ಲರನ್ನು ಕಾಪಾಡುತ್ತಾನೆ; ಆದರೆ ದುಷ್ಟರೆಲ್ಲರನ್ನು ನಾಶಮಾಡುತ್ತಾನೆ.ನನ್ನ ಬಾಯಿ ಕರ್ತನ ಸ್ತೋತ್ರ ವನ್ನು ನುಡಿಯಲಿ; ಎಲ್ಲಾ ಮನುಷ್ಯರು ಆತನ ಪರಿಶುದ್ಧವಾದ ಹೆಸರನ್ನು ಯುಗಯುಗಾಂತರಗಳಿಗೂ ಸ್ತುತಿಸಲಿ.
145:21b.PSA.145.021 ನನ್ನ ಬಾಯಿ ಕರ್ತನ ಸ್ತೋತ್ರ ವನ್ನು ನುಡಿಯಲಿ; ಎಲ್ಲಾ ಮನುಷ್ಯರು ಆತನ ಪರಿಶುದ್ಧವಾದ ಹೆಸರನ್ನು ಯುಗಯುಗಾಂತರಗಳಿಗೂ ಸ್ತುತಿಸಲಿ.
146
146:1b.PSA.146.001 ಕರ್ತನನ್ನು ಸ್ತುತಿಸಿರಿ. ನನ್ನ ಪ್ರಾಣವೇ, ಕರ್ತನನ್ನು ಸ್ತುತಿಸು.
146:2b.PSA.146.002 ನನ್ನ ಪ್ರಾಣವಿರುವ ವರೆಗೂ ಕರ್ತನನ್ನು ಸ್ತುತಿಸುವೆನು; ನನ್ನ ಜೀವಮಾನವೆಲ್ಲಾ ನನ್ನ ದೇವರನ್ನು ಕೀರ್ತಿ ಸುವೆನು.
146:3b.PSA.146.003 ಪ್ರಭುಗಳಲ್ಲಿ ಭರವಸವಿಡಬೇಡಿರಿ; ಮಾನ ವರನ್ನು ನೆಚ್ಚಬೇಡಿರಿ, ಅವನು ಸಹಾಯಮಾಡ ಶಕ್ತ ನಲ್ಲ;
146:4b.PSA.146.004 ಅವನ ಉಸಿರು ಹೋಗಲು ಅವನು ಮಣ್ಣಿಗೆ ಹಿಂತಿರುಗುವನು; ಅದೇ ದಿನದಲ್ಲಿ ಅವನ ಸಂಕಲ್ಪ ಗಳೆಲ್ಲಾ ನಾಶವಾಗುತ್ತವೆ.
146:5b.PSA.146.005 ಯಾಕೋಬನ ದೇವರನ್ನು ತನ್ನ ಸಹಾಯವನ್ನಾಗಿ ಮಾಡಿಕೊಂಡವನು ಧನ್ಯನು; ಅವನು ತನ್ನ ದೇವರಾದ ಕರ್ತನ ಮೇಲೆ ತನ್ನ ನಿರೀಕ್ಷೆ ಇಡುವನು.
146:6b.PSA.146.006 ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಎಲ್ಲವನ್ನೂ ಉಂಟುಮಾಡಿದಾತನೇ ಎಂದೆಂದಿಗೂ ವಾಗ್ದಾನ ನೆರವೇರಿಸುತ್ತಾನೆ.
146:7b.PSA.146.007 ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ ಹಸಿ ದವರಿಗೆ ಆಹಾರ ಕೊಡುವವನೂ ಆತನೇ.
146:8b.PSA.146.008 ಕರ್ತನು ಸೆರೆಯವರನ್ನು ಬಿಡಿಸುತ್ತಾನೆ. ಕರ್ತನು ಕುರುಡರ ಕಣ್ಣುಗಳನ್ನು ತೆರೆಯುತ್ತಾನೆ; ಕರ್ತನು ದೀನರನ್ನು ಎತ್ತು ತ್ತಾನೆ; ಕರ್ತನು ನೀತಿವಂತರನ್ನು ಪ್ರೀತಿಮಾಡುತ್ತಾನೆ;
146:9b.PSA.146.009 ಕರ್ತನು ಪರದೇಶಸ್ಥರನ್ನು ಕಾಪಾಡುತ್ತಾನೆ; ದಿಕ್ಕಿಲ್ಲದ ವರನ್ನೂ ವಿಧವೆಯರನ್ನೂ ಪರಾಮರಿಸುತ್ತಾನೆ; ಆದರೆ ದುಷ್ಟರ ಮಾರ್ಗವನ್ನು ಡೊಂಕುಮಾಡುತ್ತಾನೆ.ಓ ಚೀಯೋನೇ, ನಿನ್ನ ದೇವರಾದ ಕರ್ತನು ತಾನೇ ತಲತಲಾಂತರಕ್ಕೂ ಆಳುತ್ತಾನೆ. ಕರ್ತನನ್ನು ಸ್ತುತಿಸಿರಿ.
146:10b.PSA.146.010 ಓ ಚೀಯೋನೇ, ನಿನ್ನ ದೇವರಾದ ಕರ್ತನು ತಾನೇ ತಲತಲಾಂತರಕ್ಕೂ ಆಳುತ್ತಾನೆ. ಕರ್ತನನ್ನು ಸ್ತುತಿಸಿರಿ.
147
147:1b.PSA.147.001 ಕರ್ತನನ್ನು ಸ್ತುತಿಸಿರಿ; ನಮ್ಮ ದೇವರನ್ನು ಕೀರ್ತಿಸುವದು ಒಳ್ಳೇದು; ಸ್ತೋತ್ರವು ರಮ್ಯವೂ ಯೋಗ್ಯವೂ ಆಗಿದೆ.
147:2b.PSA.147.002 ಕರ್ತನು ಯೆರೂಸಲೇಮನ್ನು ಕಟ್ಟುತ್ತಾನೆ; ಚದರಿಹೋದ ಇಸ್ರಾಯೇಲ್ಯರನ್ನು ಕೂಡಿಸುತ್ತಾನೆ.
147:3b.PSA.147.003 ಆತನು ಮುರಿದ ಹೃದಯದವರನ್ನು ಸ್ವಸ್ಥಮಾಡಿ ಅವರ ಗಾಯಗಳನ್ನು ಕಟ್ಟುತ್ತಾನೆ.
147:4b.PSA.147.004 ಆತನು ನಕ್ಷತ್ರಗಳ ಸಂಖ್ಯೆಯನ್ನು ಹೇಳು ತ್ತಾನೆ; ಅವೆಲ್ಲವುಗಳನ್ನು ಅವುಗಳ ಹೆಸರಿನಿಂದ ಕರೆ ಯುತ್ತಾನೆ.
147:5b.PSA.147.005 ನಮ್ಮ ಕರ್ತನು ದೊಡ್ಡವನೂ, ಪರಾ ಕ್ರಮಿಯೂ, ವಿವೇಕಕ್ಕೆ ಎಣೆಯಿಲ್ಲ.
147:6b.PSA.147.006 ಕರ್ತನು ಸಾತ್ವಿಕರನ್ನು ಎತ್ತುತ್ತಾನೆ. ದುಷ್ಟರನ್ನು ನೆಲಕ್ಕೆ ಹಾಕುತ್ತಾನೆ.
147:7b.PSA.147.007 ಕರ್ತನಿಗೆ ಸ್ತೋತ್ರದಿಂದ ಹಾಡಿರಿ; ನಮ್ಮ ದೇವ ರನ್ನು ಕಿನ್ನರಿಯಿಂದ ಕೀರ್ತಿಸಿರಿ.
147:8b.PSA.147.008 ಆತನು ಆಕಾಶವನ್ನು ಮೋಡಗಳಿಂದ ಮುಚ್ಚುತ್ತಾನೆ; ಭೂಮಿಗೆ ಮಳೆ ಯನ್ನು ಸಿದ್ಧಮಾಡುತ್ತಾನೆ, ಬೆಟ್ಟಗಳಲ್ಲಿ ಹುಲ್ಲನ್ನು ಬೆಳೆಸುತ್ತಾನೆ.
147:9b.PSA.147.009 ಆತನು ಪಶುಗಳಿಗೂ ಕೂಗುವ ಕಾಗೆ ಮರಿಗಳಿಗೂ ಆಹಾರ ಕೊಡುತ್ತಾನೆ.
147:10b.PSA.147.010 ಆತನು ಕುದು ರೆಯ ಶಕ್ತಿಯಲ್ಲಿ ಸಂತೋಷಿಸುವದಿಲ್ಲ; ಮನುಷ್ಯನ ತೊಡೆಯಬಲವನ್ನು ಮೆಚ್ಚುವದಿಲ್ಲ.
147:11b.PSA.147.011 ಕರ್ತನು ತನಗೆ ಭಯಪಡುವವರಲ್ಲಿಯೂ ತನ್ನ ಕರುಣೆಗೆ ಎದುರು ನೋಡುವವರಲ್ಲಿಯೂ ಇಷ್ಟಪಡುತ್ತಾನೆ.
147:12b.PSA.147.012 ಓ ಯೆರೂ ಸಲೇಮೇ, ಕರ್ತನನ್ನು ಸ್ತುತಿಸು; ಓ ಚೀಯೋನೇ, ನಿನ್ನ ದೇವರನ್ನು ಸ್ತುತಿಸು.
147:13b.PSA.147.013 ನಿನ್ನ ಬಾಗಲುಗಳ ಅಗುಳಿ ಗಳನ್ನು ಬಲಮಾಡಿ ಆತನು ನಿನ್ನ ಮಕ್ಕಳನ್ನು ನಿನ್ನ ಮಧ್ಯದಲ್ಲಿ ಆಶೀರ್ವದಿಸುತ್ತಾನೆ.
147:14b.PSA.147.014 ಆತನು ನಿನ್ನ ಮೇರೆಗಳನ್ನು ಸಮಾಧಾನಪಡಿಸುತ್ತಾನೆ. ಶ್ರೇಷ್ಠವಾದ ಗೋಧಿಯಿಂದ ನಿನ್ನನ್ನು ತೃಪ್ತಿಪಡಿಸುತ್ತಾನೆ.
147:15b.PSA.147.015 ಆತನು ತನ್ನ ಆಜ್ಞೆಯನ್ನು ಭೂಮಿಗೆ ಕಳುಹಿಸುತ್ತಾನೆ; ಅತಿ ತೀವ್ರವಾಗಿ ಆತನ ವಾಕ್ಯವು ಓಡುತ್ತದೆ;
147:16b.PSA.147.016 ಆತನು ಹಿಮವನ್ನು ಉಣ್ಣೆಯ ಹಾಗೆ ಕೊಡುತ್ತಾನೆ; ಮಂಜನ್ನು ಬೂದಿಯ ಹಾಗೆ ಚದರಿಸುತ್ತಾನೆ.
147:17b.PSA.147.017 ತನ್ನ ನೀರುಗಡ್ಡೆ ಯನ್ನು ತುಂಡುಗಳ ಹಾಗೆ ಹಾಕುತ್ತಾನೆ; ಆತನ ಚಳಿಯ ಮುಂದೆ ಯಾರು ನಿಲ್ಲುವರು?
147:18b.PSA.147.018 ಆತನು ತನ್ನ ವಾಕ್ಯವನ್ನು ಕಳುಹಿಸಿ ಅವುಗಳನ್ನು ಕರಗಿಸುತ್ತಾನೆ; ತನ್ನ ಗಾಳಿಯನ್ನು ಬೀಸಮಾಡುತ್ತಾನೆ; ನೀರು ಹರಿಯುತ್ತದೆ.
147:19b.PSA.147.019 ಆತನು ಯಾಕೋಬರಿಗೆ ತನ್ನ ವಾಕ್ಯವನ್ನೂ ಇಸ್ರಾಯೇಲಿಗೆ ನಿಯಮಗಳನ್ನೂ ನ್ಯಾಯವಿಧಿಗಳನ್ನೂ ತಿಳಿಸುತ್ತಾನೆ.ಯಾವ ಜನಾಂಗಕ್ಕಾದರೂ ಆತನು ಹೀಗೆ ಮಾಡ ಲಿಲ್ಲ; ನ್ಯಾಯವಿಧಿಗಳನ್ನು ಅವರು ತಿಳುಕೊಳ್ಳುವದಿಲ್ಲ. ನೀವು ಕರ್ತನನ್ನು ಸ್ತುತಿಸಿರಿ.
147:20b.PSA.147.020 ಯಾವ ಜನಾಂಗಕ್ಕಾದರೂ ಆತನು ಹೀಗೆ ಮಾಡ ಲಿಲ್ಲ; ನ್ಯಾಯವಿಧಿಗಳನ್ನು ಅವರು ತಿಳುಕೊಳ್ಳುವದಿಲ್ಲ. ನೀವು ಕರ್ತನನ್ನು ಸ್ತುತಿಸಿರಿ.
148
148:1b.PSA.148.001 ಕರ್ತನನ್ನು ನೀವು ಸ್ತುತಿಸಿರಿ, ಕರ್ತನನ್ನು ಆಕಾಶದಿಂದ ನೀವು ಸ್ತುತಿಸಿರಿ; ಉನ್ನತವಾದವುಗಳಲ್ಲಿ ಆತನನ್ನು ಸ್ತುತಿಸಿರಿ.
148:2b.PSA.148.002 ಆತನ ದೂತರೆಲ್ಲರೇ, ಆತನನ್ನು, ಸ್ತುತಿಸಿರಿ; ಆತನ ಎಲ್ಲಾ ಸೈನ್ಯಗಳೇ, ಆತನನ್ನು ಸ್ತುತಿಸಿರಿ;
148:3b.PSA.148.003 ಸೂರ್ಯ ಚಂದ್ರರೇ, ಆತನನ್ನು ಸ್ತುತಿಸಿರಿ; ಹೊಳೆಯುವ ನಕ್ಷತ್ರಗಳೇ, ಆತ ನನ್ನು ಸ್ತುತಿಸಿರಿ.
148:4b.PSA.148.004 ಆಕಾಶಗಳ ಆಕಾಶಗಳೇ, ಆಕಾಶಗಳ ಮೇಲೆ ಇರುವ ನೀರುಗಳೇ, ಆತನನ್ನು ಸ್ತುತಿಸಿರಿ.
148:5b.PSA.148.005 ಕರ್ತನ ಹೆಸರನ್ನು ಅವು ಸ್ತುತಿಸಲಿ; ಆತನು ಆಜ್ಞಾ ಪಿಸಲು ಅವು ನಿರ್ಮಿಸಲ್ಪಟ್ಟವು.
148:6b.PSA.148.006 ಆತನು ಅವುಗಳನ್ನು ಯುಗಯುಗಗಳಿಗೂ ಸ್ಥಾಪಿಸಿದ್ದಾನೆ; ಆಜ್ಞೆಯನ್ನು ಕೊಟ್ಟಿ ದ್ದಾನೆ, ಅದು ವಿಾರಿ ಹೋಗುವದಿಲ್ಲ.
148:7b.PSA.148.007 ಭೂಮಿಯಿಂದ ಕರ್ತನನ್ನು ಸ್ತುತಿಸಿರಿ; ಎಲ್ಲಾ ಅಗಾಧಗಳೇ,
148:8b.PSA.148.008 ಬೆಂಕಿಯೇ, ಕಲ್ಮಳೆಯೇ, ಹಿಮವೇ, ಹಬೆಯೇ, ಆತನ ವಾಕ್ಯವನ್ನು ಕೈಕೊಳ್ಳುವ ಬಿರು ಗಾಳಿಯೇ,
148:9b.PSA.148.009 ಬೆಟ್ಟಗಳೇ, ಎಲ್ಲಾ ಗುಡ್ಡಗಳೇ, ಹಣ್ಣಿನ ಮರಗಳೇ, ಎಲ್ಲಾ ದೇವದಾರುಗಳೇ,
148:10b.PSA.148.010 ಮೃಗಗಳೇ, ಎಲ್ಲಾ ಪಶುಗಳೇ, ಹರಿದಾಡುವ ಜೀವಜಂತುಗಳೇ ಹಾರುವ ಪಕ್ಷಿಗಳೇ,
148:11b.PSA.148.011 ಭೂರಾಜರೇ, ಎಲ್ಲಾ ಪ್ರಜೆ ಗಳೇ, ಪ್ರಧಾನರೇ, ಭೂಮಿಯ ಎಲ್ಲಾ ನ್ಯಾಯಾಧಿ ಪತಿಗಳೇ,
148:12b.PSA.148.012 ಪ್ರಾಯಸ್ಥರೇ, ಕನ್ಯೆಯರೇ, ಮಕ್ಕಳೇ, ಮುದುಕರೇ,
148:13b.PSA.148.013 ಕರ್ತನ ಹೆಸರನ್ನು ಸ್ತುತಿಸಿರಿ; ಆತನ ಹೆಸರು ಮಾತ್ರ ಶ್ರೇಷ್ಠವಾಗಿದೆ; ಆತನ ಮಹಿಮೆಯು ಭೂಮ್ಯಾಕಾಶಗಳ ಮೇಲೆ ಅದೆ.ಆತನು ತನ್ನ ಜನರ ಕೊಂಬನ್ನು ಮೇಲಕ್ಕೆತ್ತಿದ್ದಾನೆ; ಆತನ ಪರಿ ಶುದ್ಧರೆಲ್ಲರೂ ಇಸ್ರಾಯೇಲಿನ ಮಕ್ಕಳು, ಅಂದರೆ ಆತನಿಗೆ ಸವಿಾಪವಾದ ಜನರ ಸ್ತೋತ್ರವನ್ನು ಗೌರವಿ ಸುತ್ತಾನೆ; ಕರ್ತನನ್ನು ಸ್ತುತಿಸಿರಿ.
148:14b.PSA.148.014 ಆತನು ತನ್ನ ಜನರ ಕೊಂಬನ್ನು ಮೇಲಕ್ಕೆತ್ತಿದ್ದಾನೆ; ಆತನ ಪರಿ ಶುದ್ಧರೆಲ್ಲರೂ ಇಸ್ರಾಯೇಲಿನ ಮಕ್ಕಳು, ಅಂದರೆ ಆತನಿಗೆ ಸವಿಾಪವಾದ ಜನರ ಸ್ತೋತ್ರವನ್ನು ಗೌರವಿ ಸುತ್ತಾನೆ; ಕರ್ತನನ್ನು ಸ್ತುತಿಸಿರಿ.
149
149:1b.PSA.149.001 ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಹೊಸ ಹಾಡನ್ನೂ ಪರಿಶುದ್ಧರ ಸಭೆ ಯಲ್ಲಿ ಆತನ ಸ್ತೋತ್ರವನ್ನೂ ಹಾಡಿರಿ.
149:2b.PSA.149.002 ಇಸ್ರಾಯೇಲು ತನ್ನನ್ನು ಉಂಟುಮಾಡಿದಾತನಲ್ಲಿ ಸಂತೋಷಿಸಲಿ; ಚೀಯೋನಿನ ಮಕ್ಕಳು ತಮ್ಮ ಅರಸನಲ್ಲಿ ಉಲ್ಲಾಸಿಸಲಿ.
149:3b.PSA.149.003 ಆತನ ಹೆಸರನ್ನು ಕುಣಿಯುತ್ತಾ ಸ್ತುತಿಸಲಿ; ದಮ್ಮಡಿ ಯಿಂದಲೂ ಕಿನ್ನರಿಯಿಂದಲೂ ಆತನನ್ನು ಕೀರ್ತಿಸಲಿ.
149:4b.PSA.149.004 ಕರ್ತನು ತನ್ನ ಜನರಲ್ಲಿ ಇಷ್ಟಪಡುತ್ತಾನೆ; ದೀನರನ್ನು ರಕ್ಷಣೆಯಿಂದ ಅಲಂಕರಿಸುತ್ತಾನೆ.
149:5b.PSA.149.005 ಪರಿಶುದ್ಧರು ಘನತೆಯಿಂದ ಉತ್ಸಾಹಪಡಲಿ; ತಮ್ಮ ಹಾಸಿಗೆಗಳ ಮೇಲೆ ಉತ್ಸಾಹಧ್ವನಿಮಾಡಲಿ.
149:6b.PSA.149.006 ಉನ್ನತ ದೇವರ ಸ್ತೋತ್ರಗಳು ಅವರ ಬಾಯಿಯ ಲ್ಲಿಯೂ ಇಬ್ಬಾಯಿ ಕತ್ತಿಯು ಅವರ ಕೈಯಲ್ಲಿಯೂ ಇರಲಿ.
149:7b.PSA.149.007 ಜನಾಂಗಗಳಲ್ಲಿ ಮುಯ್ಯಿಗೆಮುಯ್ಯನ್ನೂ ಪ್ರಜೆ ಗಳಲ್ಲಿ ಶಿಕ್ಷೆಗಳನ್ನೂ ಮಾಡಲಿ.
149:8b.PSA.149.008 ಅವರ ಅರಸುಗಳನ್ನು ಸಂಕೋಲೆಗಳಿಂದಲೂ ಅವರ ಘನವುಳ್ಳವರನ್ನು ಕಬ್ಬಿ ಣದ ಬೇಡಿಗಳಿಂದಲೂ ಬಂಧಿಸಲಿ;ಬರೆಯಲ್ಪಟ್ಟ ನ್ಯಾಯವಿಧಿಯನ್ನು ಅವರಿಗೆ ವಿಧಿಸಲಿ. ಆತನ ಪರಿಶುದ್ಧ ರೆಲ್ಲರಿಗೆ ಈ ಘನವಿರುತ್ತದೆ. ನೀವು ಕರ್ತನನ್ನು ಸ್ತುತಿಸಿರಿ.
149:9b.PSA.149.009 ಬರೆಯಲ್ಪಟ್ಟ ನ್ಯಾಯವಿಧಿಯನ್ನು ಅವರಿಗೆ ವಿಧಿಸಲಿ. ಆತನ ಪರಿಶುದ್ಧ ರೆಲ್ಲರಿಗೆ ಈ ಘನವಿರುತ್ತದೆ. ನೀವು ಕರ್ತನನ್ನು ಸ್ತುತಿಸಿರಿ.
150
150:1b.PSA.150.001 ನೀವು ಕರ್ತನನ್ನು ಸ್ತುತಿಸಿರಿ. ದೇವರನ್ನು ಆತನ ಪರಿಶುದ್ಧ ಆಲಯದಲ್ಲಿ ಸ್ತುತಿಸಿರಿ; ಆತನ ಬಲದ ಆಂತರಿಕ್ಷದಲ್ಲಿ ಆತನನ್ನು ಸ್ತುತಿಸಿರಿ.
150:2b.PSA.150.002 ಆತನ ಪರಾಕ್ರಮಗಳಿಗೋಸ್ಕರ ಆತನನ್ನು ಸ್ತುತಿಸಿರಿ; ಆತನ ಮಹಾ ಪ್ರಭಾವದ ಪ್ರಕಾರ ಆತನನ್ನು ಸ್ತುತಿಸಿರಿ.
150:3b.PSA.150.003 ತುತೂರಿಯ ಶಬ್ದ ದಿಂದ ಆತನನ್ನು ಸ್ತುತಿಸಿರಿ. ವೀಣೆಯಿಂದಲೂ ಕಿನ್ನರಿಯಿಂದಲೂ ಆತನನ್ನು ಸ್ತುತಿಸಿರಿ.
150:4b.PSA.150.004 ದಮ್ಮಡಿ ಯಿಂದಲೂ ಕುಣಿಯುತ್ತಾ ಆತನನ್ನು ಸ್ತುತಿಸಿರಿ; ತಂತಿವಾದ್ಯಗಳಿಂದಲೂ ಕೊಳಲುಗಳಿಂದಲೂ ಆತ ನನ್ನು ಸ್ತುತಿಸಿರಿ.
150:5b.PSA.150.005 ಜಲ್ಲರಿಯ ದೊಡ್ಡ ಶಬ್ದದಿಂದ ಆತನನ್ನು ಸ್ತುತಿಸಿರಿ; ಉತ್ಸಾಹದ ತಾಳಗಳಿಂದ ಆತನನ್ನು ಸ್ತುತಿಸಿರಿ.ಶ್ವಾಸವಿರುವದೆಲ್ಲಾ ಕರ್ತನನ್ನು ಸ್ತುತಿಸಲಿ. ಕರ್ತನನ್ನು ಸ್ತುತಿಸಿರಿ.
150:6b.PSA.150.006 ಶ್ವಾಸವಿರುವದೆಲ್ಲಾ ಕರ್ತನನ್ನು ಸ್ತುತಿಸಲಿ. ಕರ್ತನನ್ನು ಸ್ತುತಿಸಿರಿ.
- Holder of rights
- Multilingual Bible Corpus
- Citation Suggestion for this Object
- TextGrid Repository (2025). Kannada Collection. Psalms (Kannada). Psalms (Kannada). Multilingual Parallel Bible Corpus. Multilingual Bible Corpus. https://hdl.handle.net/21.11113/0000-0016-A1A7-5