Proverbs (Kannada)
1
1:1b.PRO.001.001 ಇಸ್ರಾಯೇಲ್ಯರ ಅರಸನೂ ದಾವೀದನ ಮಗನೂ ಆದ ಸೊಲೊಮೋನನ ಸಾಮ ತಿಗಳು.
1:2b.PRO.001.002 ಜ್ಞಾನವನ್ನು ಶಿಕ್ಷಣವನ್ನು ತಿಳುಕೊಳ್ಳುವದಕ್ಕೂ ವಿವೇಕದ ಮಾತುಗಳನ್ನು ಗ್ರಹಿಸುವದಕ್ಕೂ
1:3b.PRO.001.003 ಜ್ಞಾನ ನ್ಯಾಯತೀರ್ಪು ನೀತಿ ಇವುಗಳ ಬೋಧನೆಯನ್ನು ಹೊಂದುವದಕ್ಕೂ
1:4b.PRO.001.004 ಇವು ಮೂಢರಿಗೆ ಜಾಣತನ ವನ್ನೂ ಯೌವನಸ್ಥನಿಗೆ ತಿಳುವಳಿಕೆಯನ್ನೂ ವಿವೇಕ ವನ್ನೂ ಕೊಡುವವುಗಳಾಗಿವೆ.
1:5b.PRO.001.005 ಜ್ಞಾನಿಯು ಕೇಳಿ ಜ್ಞಾನ ವನ್ನು ಹೆಚ್ಚಿಸಿಕೊಳ್ಳುವನು; ತಿಳುವಳಿಕೆಯ ಮನುಷ್ಯನು ಜ್ಞಾನದ ಆಲೋಚನೆಗಳನ್ನು ಸಂಪಾದಿಸಿಕೊಳ್ಳುವನು.
1:6b.PRO.001.006 ಸಾಮತಿಯನ್ನು ಅದರ ಅರ್ಥವನ್ನು ಜ್ಞಾನಿಗಳ ಮಾತು ಗಳನ್ನು ಅವರ ಗೂಢವಾದ ಮಾತುಗಳನ್ನು ಗ್ರಹಿಸು ವಂತೆ ಇವು ಮಾಡುವವುಗಳಾಗಿವೆ.
1:7b.PRO.001.007 ಕರ್ತನ ಭಯವೇ ಜ್ಞಾನದ ಮೂಲ; ಮೂರ್ಖರು ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆಮಾಡುತ್ತಾರೆ.
1:8b.PRO.001.008 ನನ್ನ ಮಗನೇ, ನಿನ್ನ ತಂದೆಯ ಶಿಕ್ಷಣವನ್ನು ಕೇಳು, ನಿನ್ನ ತಾಯಿಯ ಕಟ್ಟಳೆಯನ್ನು ತೊರೆಯಬೇಡ;
1:9b.PRO.001.009 ಅವು ನಿನ್ನ ತಲೆಗೆ ಕೃಪೆಯ ಆಭರಣವೂ ನಿನ್ನ ಕೊರಳಿನ ಸುತ್ತಲೂ ಸರಗಳಂತೆಯೂ ಇರುವವು.
1:10b.PRO.001.010 ನನ್ನ ಮಗನೇ, ಪಾಪಿ ಗಳು ನಿನ್ನನ್ನು ಆಕರ್ಷಿಸಿದರೆ ನೀನು ಒಪ್ಪಬೇಡ.
1:11b.PRO.001.011 ಅವರು--ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚು ಹಾಕೋಣ, ನಿರಪರಾಧಿಗಳಿಗಾಗಿ ನಿಷ್ಕಾರಣದಿಂದ ರಹಸ್ಯವಾಗಿ ಅಡಗಿಕೊಳ್ಳೋಣ.
1:12b.PRO.001.012 ಗುಂಡಿಯೊಳಕ್ಕೆ ಹೋಗುವವರನ್ನು ನುಂಗುವಂತೆ ಸಂಪೂರ್ಣವಾಗಿ ನಾವು ಅವರನ್ನು ಸಮಾಧಿಯಂತೆ ನುಂಗಿಬಿಡೋಣ.
1:13b.PRO.001.013 ಅಮೂಲ್ಯವಾದ ಎಲ್ಲಾ ಸಂಪತ್ತನ್ನು ನಾವು ಕಂಡು ಹಿಡಿದು ಕೊಳ್ಳೆಯಿಂದ ನಮ್ಮ ಮನೆಗಳನ್ನು ತುಂಬಿ ಕೊಳ್ಳೋಣ.
1:14b.PRO.001.014 ನೀನು ನಮ್ಮ ಮಧ್ಯದಲ್ಲಿ ಚೀಟನ್ನು ಹಾಕು, ನಮ್ಮೆಲ್ಲರಿಗೂ ಒಂದೇ ಹಣದ ಚೀಲ ಇರಲಿ ಎಂದು ಹೇಳುತ್ತಾರೆ.
1:15b.PRO.001.015 ನನ್ನ ಮಗನೇ, ಮಾರ್ಗದಲ್ಲಿ ಅವರೊಂದಿಗೆ ನಡೆಯಬೇಡ; ಅವರ ಮಾರ್ಗದಿಂದ ನಿನ್ನ ಹೆಜ್ಜೆಯನ್ನು ಹಿಂದೆ ತಕ್ಕೋ.
1:16b.PRO.001.016 ಅವರ ಪಾದಗಳು ಕೇಡಿಗೆ ಓಡುತ್ತವೆ, ರಕ್ತವನ್ನು ಸುರಿಸುವದಕ್ಕೆ ಆತುರ ಪಡುತ್ತವೆ.
1:17b.PRO.001.017 ನಿಶ್ಚಯವಾಗಿ ಪಕ್ಷಿಯ ಕಣ್ಣೆದುರಿಗೆ ಬಲೆಯನ್ನು ಹರಡುವದು ವ್ಯರ್ಥವೇ.
1:18b.PRO.001.018 ಅವರು ತಮ್ಮ ಸ್ವಂತ ರಕ್ತಕ್ಕೆ ಹೊಂಚುಹಾಕುತ್ತಾರೆ; ತಮ್ಮ ಪ್ರಾಣಗಳಿಗೆ ರಹಸ್ಯವಾಗಿ ಅಡಗಿಕೊಳ್ಳುತ್ತಾರೆ.
1:19b.PRO.001.019 ತಮ್ಮ ಸ್ವಂತ ಪ್ರಾಣಗಳನ್ನು ತೆಗೆದುಕೊಳ್ಳುವ ದುರ್ಲಾಭಾ ಪೇಕ್ಷಕರ ಪ್ರತಿಯೊಬ್ಬನ ಮಾರ್ಗಗಳು ಹೀಗಿವೆ.
1:20b.PRO.001.020 ಹೊರಗೆ ಜ್ಞಾನವೆಂಬಾಕೆಯು ಕೂಗುತ್ತಾಳೆ. ಬೀದಿಗಳಲ್ಲಿ ಆಕೆಯು ತನ್ನ ಧ್ವನಿಗೈಯುತ್ತಾಳೆ.
1:21b.PRO.001.021 ಸಮೂಹದ ಮುಖ್ಯ ಸ್ಥಳದಲ್ಲಿಯೂ ದ್ವಾರಗಳ ಬಳಿಯಲ್ಲಿಯೂ ಅವಳು ಕೂಗುತ್ತಾಳೆ, ಪಟ್ಟಣದಲ್ಲಿ ಅವಳು ತನ್ನ ಮಾತುಗಳನ್ನು ಉಚ್ಚರಿಸುತ್ತಾ--
1:22b.PRO.001.022 ಜ್ಞಾನ ಹೀನರೇ, ನೀವು ಎಷ್ಟು ಕಾಲ ಅಜ್ಞಾನವನ್ನು ಪ್ರೀತಿಸುವಿರಿ? ತಿರಸ್ಕರಿಸುವವರು ತಮ್ಮ ತಿರಸ್ಕರಿಸು ವಿಕೆಯಲ್ಲಿ ಎಷ್ಟುಕಾಲ ಆನಂದಿಸುವರು? ಜ್ಞಾನ ಹೀನರು ಎಷ್ಟು ಕಾಲ ತಿಳುವಳಿಕೆಯನ್ನು ಹಗೆ ಮಾಡುವರು?
1:23b.PRO.001.023 ನನ್ನ ಗದರಿಕೆಗೆ ನೀವು ತಿರುಗಿ ಕೊಳ್ಳಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ ನಿಮಗೆ ನನ್ನ ಮಾತುಗಳು ತಿಳಿಯುವಂತೆ ಮಾಡುವೆನು.
1:24b.PRO.001.024 ನಾನು ಕರೆದಾಗ ನೀವು ತಿರಸ್ಕರಿಸಿದ್ದಕ್ಕಾಗಿಯೂ ನಾನು ನನ್ನ ಕೈಚಾಚಿದಾಗ ಯಾವ ಮನುಷ್ಯನು ಗಮನಿಸದೆ ಇದ್ದದ್ದಕ್ಕಾಗಿಯೂ
1:25b.PRO.001.025 ನನ್ನ ಆಲೋಚನೆಯನ್ನು ನೀವು ಲಕ್ಷಿಸದೆ ನನ್ನ ಗದರಿಕೆ ಯನ್ನು ನೀವು ಬೇಡವೆಂದು ತಳ್ಳಿಬಿಟ್ಟದ್ದರಿಂದಲೂ
1:26b.PRO.001.026 ನಿಮ್ಮ ಆಪತ್ತಿನಲ್ಲಿ ನಿಮಗೆ ಹೆದರಿಕೆ ಬರುವಾಗ
1:27b.PRO.001.027 ನಿಮ್ಮ ಭಯವು ತೀವ್ರ ದುಃಖದಂತೆಯೂ ನಿಮ್ಮ ನಾಶನವು ತುಫಾನಿನಂತೆಯೂ ಬರುವಾಗ ಅಪಾಯ ಮತ್ತು ಆಪತ್ತು ನಿಮ್ಮ ಮೇಲೆ ಬರುವಾಗ ನಾನು ಸಹ ನಕ್ಕು ಪರಿಹಾಸ್ಯಮಾಡುವೆನು.
1:28b.PRO.001.028 ಅವರು ನನಗೆ ಮೊರೆಯಿಡುವರು, ಆದರೆ ನಾನು ಅವರಿಗೆ ಉತ್ತರಕೊಡೆನು. ಅವರು ಆತುರದಿಂದ ನನ್ನನ್ನು ಹುಡು ಕಿದರೂ ಕಂಡುಕೊಳ್ಳುವದಿಲ್ಲ.
1:29b.PRO.001.029 ಅವರು ತಿಳುವಳಿಕೆ ಯನ್ನು ಹಗೆಮಾಡಿ ಕರ್ತನ ಭಯವನ್ನು ಆರಿಸಿಕೊ ಳ್ಳದೆ ಇದ್ದದರಿಂದಲೂ
1:30b.PRO.001.030 ನನ್ನ ಆಲೋಚನೆಯನ್ನು ಗಮನಿಸದೆ ಇದ್ದದಕ್ಕಾಗಿಯೂ ನನ್ನ ಗದರಿಕೆಯನ್ನೆಲ್ಲಾ ಅಸಡ್ಡೆ ಮಾಡಿದ್ದಕ್ಕಾಗಿಯೂ
1:31b.PRO.001.031 ಅವರು ತಮ್ಮ ಸ್ವಂತ ನಡತೆಯ ಫಲವನ್ನು ಅನುಭವಿಸಿ ತಮ್ಮ ಸ್ವಂತ ಕುಯುಕ್ತಿಗಳಿಂದಲೇ ತುಂಬಿಕೊಳ್ಳುವರು.
1:32b.PRO.001.032 ಅಜ್ಞಾನಿ ಗಳ ವಿಮುಖವು ಅವರನ್ನು ಕೊಲ್ಲುವದು, ಜ್ಞಾನ ಹೀನರ ಏಳಿಗೆ ಅವರನ್ನು ನಾಶಪಡಿಸುವದು.ನನಗೆ ಕಿವಿಗೊಡುವವನಾದರೋ ಜೀವಿಸಿ ಯಾವ ಕೇಡಿನ ಭಯವಿಲ್ಲದೆ ನೆಮ್ಮದಿಯಲ್ಲಿರುವನು.
1:33b.PRO.001.033 ನನಗೆ ಕಿವಿಗೊಡುವವನಾದರೋ ಜೀವಿಸಿ ಯಾವ ಕೇಡಿನ ಭಯವಿಲ್ಲದೆ ನೆಮ್ಮದಿಯಲ್ಲಿರುವನು.
2
2:1b.PRO.002.001 ನನ್ನ ಮಗನೇ, ನನ್ನ ಮಾತುಗಳನ್ನು ನೀನು ಅಂಗೀಕರಿಸಿ ನನ್ನ ಆಜ್ಞೆಗಳನ್ನು ನಿನ್ನಲ್ಲಿ ಬಚ್ಚಿಟ್ಟುಕೊಂಡರೆ
2:2b.PRO.002.002 ನೀನು ಜ್ಞಾನಕ್ಕೆ ಕಿವಿಗೊಡು ವಂತೆಯೂ ತಿಳುವಳಿಕೆಗೆ ನಿನ್ನ ಹೃದಯವನ್ನು ತಿರು ಗಿಸುವಂತೆಯೂ
2:3b.PRO.002.003 ಹೌದು, ತಿಳುವಳಿಕೆಗಾಗಿ ಮೊರೆ ಯಿಟ್ಟು ವಿವೇಕಕ್ಕಾಗಿ ನಿನ್ನ ಸ್ವರವನ್ನು ಎತ್ತಿ
2:4b.PRO.002.004 ಬೆಳ್ಳಿ ಯಂತೆ ನೀನು ಅದನ್ನು ಹುಡುಕಿ ಬಚ್ಚಿಡಲ್ಪಟ್ಟ ಸಂಪ ತ್ತಿನಂತೆ ಅದಕ್ಕಾಗಿ ಹುಡುಕಿದರೆ,
2:5b.PRO.002.005 ನೀನು ಕರ್ತನ ಭಯವನ್ನು ತಿಳಿದುಕೊಳ್ಳುವಿ. ದೇವರ ಜ್ಞಾನವನ್ನು ಕಂಡುಕೊಳ್ಳುವಿ.
2:6b.PRO.002.006 ಜ್ಞಾನವನ್ನು ಕರ್ತನೇ ಕೊಡುತ್ತಾನೆ; ಆತನ ಬಾಯಿಂದಲೇ ತಿಳುವಳಿಕೆಯೂ ವಿವೇಕವೂ ಹೊರಟು ಬರುತ್ತವೆ.
2:7b.PRO.002.007 ನೀತಿವಂತರಿಗೋಸ್ಕರ ಆತನು ಸುಜ್ಞಾನವನ್ನು ಕೂಡಿಸುವನು. ಯಥಾರ್ಥದಿಂದ ನಡೆದುಕೊಳ್ಳುವವರಿಗೆ ಆತನು ಗುರಾಣಿಯಾಗಿದ್ದಾನೆ.
2:8b.PRO.002.008 ತೀರ್ಪಿನ ದಾರಿಗಳನ್ನು ಆತನು ಕಾಯುತ್ತಾನೆ. ತನ್ನ ಪರಿಶುದ್ಧರ ಮಾರ್ಗವನ್ನು ಭದ್ರಪಡಿಸುತ್ತಾನೆ.
2:9b.PRO.002.009 ಆಗ ನೀನು ನ್ಯಾಯವನ್ನೂ ತೀರ್ಪನ್ನೂ ನೀತಿಯನ್ನೂ ಮಾತ್ರವಲ್ಲದೆ ಪ್ರತಿಯೊಂದು ಸನ್ಮಾರ್ಗವನ್ನೂ ತಿಳಿದು ಕೊಳ್ಳುವಿ.
2:10b.PRO.002.010 ನಿನ್ನ ಹೃದಯದಲ್ಲಿ ಜ್ಞಾನವು ಪ್ರವೇಶಿ ಸಿದಾಗ ನಿನ್ನ ಪ್ರಾಣಕ್ಕೆ ತಿಳುವಳಿಕೆಯು ಅಂದವಾಗಿರು ವದು.
2:11b.PRO.002.011 ವಿವೇಕವು ನಿನ್ನನ್ನು ಭದ್ರವಾಗಿ ಕಾಯುತ್ತದೆ; ತಿಳುವಳಿಕೆಯು ನಿನ್ನನ್ನು ಕಾಪಾಡುವದು;
2:12b.PRO.002.012 ಕೆಡುಕನ ಮಾರ್ಗದಿಂದ ಮೂರ್ಖನ ಮಾತುಗಳಿಂದ
2:13b.PRO.002.013 ಕತ್ತ ಲೆಯ ಮಾರ್ಗಗಳಲ್ಲಿ ನಡೆಯುವದಕ್ಕೆ ಯಥಾರ್ಥ ತೆಯ ದಾರಿಗಳನ್ನು ತೊರೆದುಬಿಡುವದರಿಂದ
2:14b.PRO.002.014 ಕೆಟ್ಟ ದ್ದನ್ನು ಮಾಡುವದಕ್ಕೆ ಸಂತೋಷಿಸಿ ದುಷ್ಟರ ಮೂರ್ಖ ತನದಲ್ಲಿ ಆನಂದಿಸುವದರಿಂದ ನಿನ್ನನ್ನು ತಪ್ಪಿಸುವದು.
2:15b.PRO.002.015 ಅವರ ಮಾರ್ಗಗಳು ವಕ್ರವಾಗಿವೆ. ತಮ್ಮ ಮಾರ್ಗ ಗಳಲ್ಲಿ ಅವರು ಮೂರ್ಖರಾಗಿದ್ದಾರೆ.
2:16b.PRO.002.016 ಪರಸ್ತ್ರೀ ಯಿಂದ ಅಂದರೆ ತನ್ನ ಮಾತುಗಳಿಂದ ಮುಖಸ್ತುತಿ ಮಾಡುವ ಸ್ತ್ರೀಯಿಂದ ತನ್ನ ದೇವರ ಒಡಂಬಡಿಕೆ ಯನ್ನು ಮರೆತು
2:17b.PRO.002.017 ತನ್ನ ಯೌವನ ಕಾಲದ ಸಂಗಾತಿ ಯನ್ನು ತ್ಯಜಿಸುವವಳಿಂದ ಅದು ನಿನ್ನನ್ನು ತಪ್ಪಿಸುವದು.
2:18b.PRO.002.018 ಅವಳ ಮನೆಯು ಮರಣದ ಕಡೆಗೆ, ಅವಳ ದಾರಿ ಗಳು ಮೃತರ ಕಡೆಗೆ ಇಳಿಸುತ್ತವೆ.
2:19b.PRO.002.019 ಅವಳ ಬಳಿಗೆ ಹೋಗುವ ಯಾವನೂ ಹಿಂತಿರುಗುವದಿಲ್ಲ, ಇಲ್ಲವೆ ಜೀವದ ಮಾರ್ಗಗಳನ್ನು ಅವನು ಹಿಡಿಯುವದೇ ಇಲ್ಲ.
2:20b.PRO.002.020 ಒಳ್ಳೆಯವರ ಮಾರ್ಗದಲ್ಲಿ ನೀನು ನಡೆಯು ವಂತೆಯೂ ನೀತಿವಂತರ ದಾರಿಗಳನ್ನು ನೀನು ಹಿಡಿಯು ವಂತೆಯೂ ಅದು ನಿನ್ನನ್ನು ನಡಿಸುವದು.
2:21b.PRO.002.021 ಯಥಾ ರ್ಥವಂತರು ದೇಶದಲ್ಲಿ ವಾಸಿಸುವರು. ಸಂಪೂರ್ಣರು ಅದರಲ್ಲಿ ನೆಲೆಯಾಗಿ ಇರುವರು.ದುಷ್ಟರಾದರೋ ಭೂಮಿಯಿಂದ ತೆಗೆದುಹಾಕಲ್ಪಡುವರು, ಅಪರಾಧಿ ಗಳು ಬೇರು ಸಹಿತವಾಗಿ ಅದರಿಂದ ಕೀಳಲ್ಪಡುವರು.
2:22b.PRO.002.022 ದುಷ್ಟರಾದರೋ ಭೂಮಿಯಿಂದ ತೆಗೆದುಹಾಕಲ್ಪಡುವರು, ಅಪರಾಧಿ ಗಳು ಬೇರು ಸಹಿತವಾಗಿ ಅದರಿಂದ ಕೀಳಲ್ಪಡುವರು.
3
3:1b.PRO.003.001 ನನ್ನ ಮಗನೇ, ನನ್ನ ಕಟ್ಟಳೆಯನ್ನು ಮರೆಯಬೇಡ. ನಿನ್ನ ಹೃದಯವು ನನ್ನ ಆಜ್ಞೆ ಗಳನ್ನು ಕಾಪಾಡಲಿ:
3:2b.PRO.003.002 ಆಗ ಹೆಚ್ಚಾದ ದಿನಗಳೂ ದೀರ್ಘಾಯುಷ್ಯವೂ ಸಮಾಧಾನವೂ ನಿನಗೆ ಕೂಡಿಸ ಲ್ಪಡುವವು.
3:3b.PRO.003.003 ಕರುಣೆಯೂ ಸತ್ಯವೂ ನಿನ್ನನ್ನು ಬಿಡದಿರಲಿ. ನಿನ್ನ ಕೊರಳಿನ ಸುತ್ತಲೂ ಅವುಗಳನ್ನು ಕಟ್ಟಿಕೋ; ನಿನ್ನ ಹೃದಯದ ಹಲಗೆಯ ಮೇಲೆ ಅವುಗಳನ್ನು ಬರೆ.
3:4b.PRO.003.004 ಹೀಗೆ ನೀನು ದೇವರ ಮುಂದೆಯೂ ಮನುಷ್ಯನ ಮುಂದೆಯೂ ದಯೆಯನ್ನೂ ಒಳ್ಳೆಯ ವಿವೇಕವನ್ನೂ ಪಡೆದುಕೊಳ್ಳುವಿ.
3:5b.PRO.003.005 ಪೂರ್ಣಹೃದಯದಿಂದ ಕರ್ತನಲ್ಲಿ ಭರವಸವಿಡು; ನಿನ್ನ ಸ್ವಂತ ಬುದ್ಧಿಯ ಮೇಲೆ ಆಧಾರ ಮಾಡಿಕೊಳ್ಳಬೇಡ.
3:6b.PRO.003.006 ನಿನ್ನ ಎಲ್ಲಾ ಮಾರ್ಗಗಳಲ್ಲಿ ಆತನನ್ನು ಸನ್ಮಾನಿಸು. ಆಗ ಆತನು ನಿನ್ನ ಮಾರ್ಗಗಳನ್ನು ಸರಾಗಮಾಡುವನು.
3:7b.PRO.003.007 ನಿನ್ನ ದೃಷ್ಟಿಯಲ್ಲಿ ಜ್ಞಾನಿಯಂತೆ ನೀನು ಇರಬೇಡ; ಕರ್ತನಿಗೆ ಭಯಪಟ್ಟು ಕೆಟ್ಟತನದಿಂದ ನೀನು ತೊಲಗಿಹೋಗು.
3:8b.PRO.003.008 ಅದು ನಿನ್ನ ದೇಹಕ್ಕೆ ಆರೋಗ್ಯವೂ ಎಲುಬುಗಳಿಗೆ ಸಾರವೂ ಆಗಿರುವದು.
3:9b.PRO.003.009 ನಿನ್ನ ಆಸ್ತಿಯಿಂದಲೂ ಅಭಿವೃದ್ಧಿಯ ಎಲ್ಲಾ ಪ್ರಥಮ ಫಲಗಳಿಂದಲೂ ಕರ್ತನನ್ನು ಸನ್ಮಾನಿಸು.
3:10b.PRO.003.010 ಹೀಗೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬಲ್ಪಡುವವು, ಹೊಸ ದ್ರಾಕ್ಷಾರಸದಿಂದ ನಿನ್ನ ತೊಟ್ಟಿಗಳು ತುಂಬಿ ತುಳುಕುವವು.
3:11b.PRO.003.011 ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ. ಮಾತ್ರವಲ್ಲದೆ ಆತನ ತಿದ್ದುವಿಕೆಗೆ ಬೇಸರ ಗೊಳ್ಳಬೇಡ;
3:12b.PRO.003.012 ತಾನು ಮೆಚ್ಚುವ ಮಗನನ್ನು ತಂದೆಯು ಶಿಕ್ಷಿಸುವಂತೆ ಕರ್ತನು ಯಾರನ್ನು ಪ್ರೀತಿಸುತ್ತಾನೋ ಅವನನ್ನು ಆತನು ತಿದ್ದುವನು.
3:13b.PRO.003.013 ಜ್ಞಾನವನ್ನು ಕಂಡು ಕೊಳ್ಳುವವನೂ ವಿವೇಕವನ್ನು ಸಂಪಾದಿಸಿಕೊಳ್ಳುವವನೂ ಧನ್ಯನು.
3:14b.PRO.003.014 ಅದರ ವ್ಯಾಪಾರವೂ ಬೆಳ್ಳಿಯ ವ್ಯಾಪಾರಕ್ಕಿಂತಲೂ ಅದರ ಲಾಭವು ಸೋಸಿದ ಬಂಗಾರಕ್ಕಿಂತಲೂ ಉತ್ತಮವಾಗಿದೆ.
3:15b.PRO.003.015 ಅದು ಮಾಣಿಕ್ಯಗಳಿಗಿಂತಲೂ ಬಹು ಅಮೂಲ್ಯವುಳ್ಳದ್ದಾಗಿದ್ದು ನಿನ್ನ ಇಷ್ಟ ವಸ್ತುಗಳೆಲ್ಲವೂ ಅದಕ್ಕೆ ಸಮವಾಗುವದಿಲ್ಲ.
3:16b.PRO.003.016 ಆಕೆಯ ಬಲಗೈಯಲ್ಲಿ ದೀರ್ಘಾಯುಷ್ಯವೂ ಎಡಗೈಯಲ್ಲಿ ಐಶ್ವರ್ಯವೂ ಘನತೆಯೂ ಇವೆ.
3:17b.PRO.003.017 ಅವಳ ಮಾರ್ಗ ಗಳು ಸಂತೋಷಕರವೂ ಎಲ್ಲಾ ದಾರಿಗಳು ಸಮಾ ಧಾನಕರವೂ ಆಗಿವೆ.
3:18b.PRO.003.018 ತನ್ನನ್ನು ಹಿಡಿದುಕೊಳ್ಳುವ ವರಿಗೆ ಆಕೆಯು ಜೀವದ ವೃಕ್ಷವಾಗಿದ್ದಾಳೆ; ಆಕೆಯನ್ನು ಭದ್ರವಾಗಿ ಇಟ್ಟುಕೊಳ್ಳುವ ಪ್ರತಿಯೊಬ್ಬನೂ ಧನ್ಯನು.
3:19b.PRO.003.019 ಕರ್ತನು ಜ್ಞಾನದಿಂದ ಭೂಮಿಯನ್ನು ಸ್ಥಾಪಿಸಿದನು; ವಿವೇಕದ ಮೂಲಕ ಆತನು ಆಕಾಶಗಳನ್ನು ಸ್ಥಿರಪಡಿಸಿ ದನು.
3:20b.PRO.003.020 ಆತನ ತಿಳುವಳಿಕೆಯಿಂದ ಅಗಾಧಗಳು ಒಡೆದು ಮೇಘಗಳು ಇಬ್ಬನಿಯನ್ನು ಸುರಿಸುತ್ತವೆ.
3:21b.PRO.003.021 ನನ್ನ ಮಗನೇ, ನಿನ್ನ ಕಣ್ಣುಗಳಿಂದ ಅವುಗಳು ತಪ್ಪಿಸಿಕೊಳ್ಳದೆ ಇರಲಿ. ಸುಜ್ಞಾನವನ್ನೂ ವಿವೇಕವನ್ನೂ ಇಟ್ಟುಕೋ.
3:22b.PRO.003.022 ಅವು ನಿನ್ನ ಪ್ರಾಣಕ್ಕೆ ಜೀವವೂ ಕೊರ ಳಿಗೆ ಸೊಬಗೂ ಆಗಿರುವವು.
3:23b.PRO.003.023 ನಿನ್ನ ಮಾರ್ಗದಲ್ಲಿ ನೀನು ನಿರ್ಭಯವಾಗಿ ನಡೆಯುವಿ, ನಿನ್ನ ಪಾದವು ಎಡವುವದಿಲ್ಲ.
3:24b.PRO.003.024 ನೀನು ಮಲಗುವಾಗ ನಿನಗೆ ಹೆದರಿಕೆ ಇರುವದಿಲ್ಲ, ಹೌದು, ನೀನು ಮಲಗಿಕೊಳ್ಳುವಿ. ನಿನ್ನ ನಿದ್ರೆಯು ಸುಖವಾಗಿರುವದು.
3:25b.PRO.003.025 ಆಕಸ್ಮತ್ತಾದ ಭಯ ಕ್ಕಾಗಲಿ ಇಲ್ಲವೆ ಅವರ ಮೇಲೆ ಬರುವ ದುಷ್ಟರ ನಾಶನಕ್ಕಾಗಲಿ ನೀನು ಭಯಪಡದಿರು.
3:26b.PRO.003.026 ಕರ್ತನೇ ನಿನಗೆ ಭರವಸನಾಗಿದ್ದು ನಿನ್ನ ಪಾದವು ತೆಗೆಯಲ್ಪಡ ದಂತೆ ಆತನು ಕಾಪಾಡುವನು.
3:27b.PRO.003.027 ನಿನಗೆ ಸಾಧ್ಯವಿರುವಾಗ ಹೊಂದತಕ್ಕವರಿಗೆ ಒಳ್ಳೆ ಯದು ಮಾಡುವದನ್ನು ತಪ್ಪಿಸಬೇಡ.
3:28b.PRO.003.028 ಕೊಡತಕ್ಕದ್ದು ನಿನ್ನಲ್ಲಿರುವಾಗ--ಹೋಗಿ ಬಾ, ನಾಳೆ ನಿನಗೆ ಕೊಡು ವೆನು ಎಂದು ನಿನ್ನ ನೆರೆಯವನಿಗೆ ಹೇಳಬೇಡ.
3:29b.PRO.003.029 ನಿನ್ನ ನೆರೆಯವನು ಭದ್ರತೆಯಿಂದ ನಿನ್ನ ಪಕ್ಕದಲ್ಲಿ ಜೀವಿ ಸುತ್ತಿರುವಾಗ ಅವನಿಗೆ ವಿರೋಧವಾಗಿ ಕೇಡನ್ನು ಕಲ್ಪಿಸ ಬೇಡ.
3:30b.PRO.003.030 ಒಬ್ಬನು ನಿನಗೆ ಯಾವ ಕೇಡನ್ನೂ ಮಾಡ ದಿದ್ದರೆ ಅವನೊಂದಿಗೆ ಯಾವ ಕಾರಣವಿಲ್ಲದೆ ಜಗಳ ವಾಡಬೇಡ.
3:31b.PRO.003.031 ಬಲಾತ್ಕಾರಿಯ ವಿಷಯದಲ್ಲಿ ನೀನು ಹೊಟ್ಟೇಕಿಚ್ಚುಪಡಬೇಡ, ಅವನ ಮಾರ್ಗಗಳಲ್ಲಿ ಯಾವದನ್ನೂ ನೀನು ಆರಿಸಿಕೊಳ್ಳಬೇಡ.
3:32b.PRO.003.032 ವಕ್ರ ಬುದ್ಧಿಯವನು ಕರ್ತನಿಗೆ ಅಸಹ್ಯನಾಗಿದ್ದಾನೆ; ಆದರೆ ಆತನ ಗುಟ್ಟು ನೀತಿವಂತರೊಂದಿಗೆ ಇದೆ.
3:33b.PRO.003.033 ಕರ್ತನ ಶಾಪವು ದುಷ್ಟರ ಮನೆಯಲ್ಲಿದೆ; ಆದರೆ ನ್ಯಾಯಸ್ಥರ ನಿವಾಸವನ್ನು ಆತನು ಆಶೀರ್ವದಿಸುತ್ತಾನೆ.
3:34b.PRO.003.034 ಆತನು ನಿಶ್ಚಯವಾಗಿಯೂ ಪರಿಹಾಸ್ಯಕರನ್ನು ತಿರಸ್ಕರಿಸುತ್ತಾನೆ; ಆದರೆ ದೀನರಿಗೆ ಆತನು ಕೃಪೆಯನ್ನು ಕೊಡುತ್ತಾನೆ.ಜ್ಞಾನಿಯು ಮಹಿಮೆಗೆ ಬಾಧ್ಯನಾಗುವನು, ಜ್ಞಾನ ಹೀನರ ಏಳಿಗೆಯು ಅವಮಾನವಾಗುವದು.
3:35b.PRO.003.035 ಜ್ಞಾನಿಯು ಮಹಿಮೆಗೆ ಬಾಧ್ಯನಾಗುವನು, ಜ್ಞಾನ ಹೀನರ ಏಳಿಗೆಯು ಅವಮಾನವಾಗುವದು.
4
4:1b.PRO.004.001 ಮಕ್ಕಳಿರಾ, ತಂದೆಯ ಶಿಕ್ಷಣವನ್ನು ನೀವು ಕೇಳಿರಿ. ವಿವೇಕವನ್ನು ಗ್ರಹಿಸುವಂತೆ ನೋಡಿರಿ.
4:2b.PRO.004.002 ನಾನು ನಿಮಗೆ ಸುಬೋಧನೆಯನ್ನು ಮಾಡುವೆನು; ನೀವು ನನ್ನ ಕಟ್ಟಳೆಯನ್ನು ಬಿಡಬೇಡಿರಿ.
4:3b.PRO.004.003 ನಾನು ಕೋಮಲನೂ ನನ್ನ ತಾಯಿಯ ದೃಷ್ಟಿಯಲ್ಲಿ ಪ್ರಿಯನಾಗಿ ಒಬ್ಬನೇ ಆಗಿದ್ದು ನನ್ನ ತಂದೆಯ ಮಗ ನಾಗಿದ್ದೇನೆ.
4:4b.PRO.004.004 ಅವನು ಬೋಧಿಸಿ ನನಗೆ ಹೇಳಿದ್ದೇ ನಂದರೆ--ನನ್ನ ಮಾತುಗಳನ್ನು ನಿನ್ನ ಹೃದಯವು ಹಿಡಿದುಕೊಳ್ಳಲಿ; ನನ್ನ ಆಜ್ಞೆಗಳನ್ನು ಕೈಕೊಂಡು ಜೀವಿಸು.
4:5b.PRO.004.005 ಜ್ಞಾನವನ್ನೂ ವಿವೇಕವನ್ನೂ ಸಂಪಾದಿಸು; ಅವುಗಳನ್ನು ಮರೆಯದಿರು, ಅಲ್ಲದೆ ನನ್ನ ಬಾಯಿಯ ಮಾತುಗಳನ್ನು ನಿರಾಕರಿಸಬೇಡ.
4:6b.PRO.004.006 ಅವುಗಳನ್ನು ತ್ಯಜಿಸ ದಿದ್ದರೆ ಅವು ನಿನ್ನನ್ನು ಕಾಯುವವು, ಅವುಗಳನ್ನು ಪ್ರೀತಿಸಿದರೆ ಅವು ನಿನ್ನನ್ನು ಕಾಪಾಡುವವು.
4:7b.PRO.004.007 ಜ್ಞಾನವೇ ಮುಖ್ಯವಾದದ್ದು; ಆದದರಿಂದ ಜ್ಞಾನವನ್ನು ಸಂಪಾ ದಿಸು, ನಿನ್ನ ಎಲ್ಲಾ ಸಂಪತ್ತಿನಿಂದ ವಿವೇಕವನ್ನು ಪಡೆ ದುಕೋ.
4:8b.PRO.004.008 ಆಕೆಯನ್ನು ನೀನು ಮೇಲೆತ್ತಿದರೆ ಆಕೆಯು ನಿನ್ನನ್ನು ಮೇಲೆತ್ತುವಳು; ಆಕೆಯನ್ನು ನೀನು ಅಪ್ಪಿ ಕೊಂಡರೆ ಆಕೆಯು ನಿನ್ನನ್ನು ಘನತೆಗೆ ತರುವಳು.
4:9b.PRO.004.009 ಆಕೆಯು ನಿನ್ನ ತಲೆಗೆ ಕೃಪೆಯ ಆಭರಣವಾಗಿರುವಳು; ಆಕೆಯು ನಿನಗೆ ಘನತೆಯ ಕಿರೀಟವನ್ನು ಒಪ್ಪಿಸುವಳು.
4:10b.PRO.004.010 ಓ ನನ್ನ ಮಗನೇ, ಆಲಿಸಿ ನನ್ನ ಮಾತುಗಳನ್ನು ಅಂಗೀಕರಿಸು; ಆಗ ನಿನ್ನ ಜೀವಿತದ ವರುಷಗಳು ಹೆಚ್ಚಾಗುವವು.
4:11b.PRO.004.011 ಜ್ಞಾನದ ಮಾರ್ಗದಲ್ಲಿ ನಾನು ನಿನಗೆ ಬೋಧಿಸಿದೆನು; ಸರಿಯಾದ ದಾರಿಗಳಲ್ಲಿ ನಾನು ನಿನ್ನನ್ನು ನಡಿಸಿದೆನು.
4:12b.PRO.004.012 ನೀನು ನಡೆಯುವಾಗ ನಿನ್ನ ಹೆಜ್ಜೆಗೆ ಇಕ್ಕಟ್ಟಾಗದು; ನೀನು ಓಡುವಾಗ ಮುಗ್ಗರಿಸುವದಿಲ್ಲ.
4:13b.PRO.004.013 ಶಿಕ್ಷಣವನ್ನು ಗಟ್ಟಿಯಾಗಿ ಹಿಡಿದುಕೋ, ಅದು ನಿನ್ನಿಂದ ತೊಲಗದೆ ಇರಲಿ. ಅದನ್ನು ಕಾಪಾಡು. ಅದು ನಿನ್ನ ಜೀವವಾಗಿದೆ.
4:14b.PRO.004.014 ದುಷ್ಟರ ದಾರಿಯೊಳಗೆ ಪ್ರವೇಶಿಸದಿರು, ಕೆಟ್ಟವರ ಮಾರ್ಗದಲ್ಲಿ ಹೋಗಬೇಡ.
4:15b.PRO.004.015 ಅದನ್ನು ತಪ್ಪಿಸು, ಅದರ ಪಕ್ಕದಲ್ಲಿ ಹಾದು ಹೋಗ ಬೇಡ, ಅದರಿಂದ ಹಿಂತಿರುಗಿ ಮುಂದೆ ನಡೆ.
4:16b.PRO.004.016 ಕೇಡು ಮಾಡದಿದ್ದರೆ ಅವರು ನಿದ್ರೆಹೋಗುವದಿಲ್ಲ; ಯಾರ ನ್ನಾದರೂ ಬೀಳಿಸದೆ ಇದ್ದರೆ ಅವರ ನಿದ್ರೆಗೆ ಭಂಗ ವಾಗುವದು.
4:17b.PRO.004.017 ಅವರು ದುಷ್ಟತನದ ರೊಟ್ಟಿಯನ್ನು ತಿಂದು ಬಲಾತ್ಕಾರದ ದ್ರಾಕ್ಷಾರಸವನ್ನು ಕುಡಿಯು ತ್ತಾರೆ.
4:18b.PRO.004.018 ಆದರೆ ಸಂಪೂರ್ಣವಾದ ದಿನಕ್ಕೆ ಹೆಚ್ಚೆಚ್ಚಾಗಿ ಹೊಳೆಯುವ ದೀಪದಂತೆ ನ್ಯಾಯವಂತರ ದಾರಿಯು ಹೊಳೆಯುವದು.
4:19b.PRO.004.019 ದುಷ್ಟರ ಮಾರ್ಗವು ಕತ್ತಲೆ ಯಂತಿದೆ. ಅವರು ಯಾವದಕ್ಕೆ ಎಡವಿ ಬೀಳುತ್ತಾರೋ ಅದು ಅವರಿಗೆ ಗೊತ್ತಾಗದು.
4:20b.PRO.004.020 ನನ್ನ ಮಗನೇ, ನನ್ನ ಮಾತುಗಳನ್ನು ಆಲಿಸು; ನನ್ನ ನುಡಿಗಳಿಗೆ ಕಿವಿಗೊಡು.
4:21b.PRO.004.021 ಅವುಗಳು ನಿನ್ನ ಕಣ್ಣುಗಳಿಗೆ ತಪ್ಪಿಹೋಗದೆ ಇರಲಿ; ಅವುಗಳನ್ನು ನಿನ್ನ ಹೃದಯದ ಮಧ್ಯದಲ್ಲಿ ಇಟ್ಟುಕೋ.
4:22b.PRO.004.022 ಅವುಗಳನ್ನು ಕಂಡುಕೊಳ್ಳುವವರಿಗೆ ಅವು ಜೀವವೂ ಅವರ ದೇಹ ಕ್ಕೆಲ್ಲಾ ಆರೋಗ್ಯವೂ ಆಗಿವೆ.
4:23b.PRO.004.023 ಬಹು ಜಾಗ್ರತೆಯಿಂದ ನಿನ್ನ ಹೃದಯವನ್ನು ಕಾಪಾಡಿಕೋ; ಜೀವಧಾರೆಗಳು ಅದರೊಳಗಿಂದ ಹೊರಡುವವು.
4:24b.PRO.004.024 ವಕ್ರಬಾಯಿ ಯನ್ನು ನಿನ್ನಿಂದ ತೆಗೆದುಬಿಡು; ಕೆಟ್ಟ ತುಟಿಗಳನ್ನು ನಿನ್ನಿಂದ ದೂರ ಇಡು.
4:25b.PRO.004.025 ನಿನ್ನ ಕಣ್ಣುಗಳು ಮುಂದೆಯೇ ನೋಡಲಿ. ನಿನ್ನ ಕಣ್ಣು ರೆಪ್ಪೆಗಳು ನೆಟ್ಟಗೆ ನಿನ್ನ ಮುಂದೆಯೇ ನೋಡಲಿ.
4:26b.PRO.004.026 ನೀನು ನಡೆಯುವ ದಾರಿ ಯನ್ನು ವಿಮರ್ಶಿಸಿ ನೋಡು; ನಿನ್ನ ಎಲ್ಲಾ ಮಾರ್ಗ ಗಳು ಸ್ಥಿರವಾಗಿರಲಿ.ನಿನ್ನ ಬಲಕ್ಕಾಗಲಿ ಎಡಕ್ಕಾಗಲಿ ತಿರುಗಬೇಡ; ಕೇಡಿನಿಂದ ನಿನ್ನ ಪಾದವನ್ನು ತಪ್ಪಿಸು.
4:27b.PRO.004.027 ನಿನ್ನ ಬಲಕ್ಕಾಗಲಿ ಎಡಕ್ಕಾಗಲಿ ತಿರುಗಬೇಡ; ಕೇಡಿನಿಂದ ನಿನ್ನ ಪಾದವನ್ನು ತಪ್ಪಿಸು.
5
5:1b.PRO.005.001 ನನ್ನ ಮಗನೇ, ನನ್ನ ಗ್ರಹಿಕೆಗೆ ಕಿವಿಗೊಡು; ನೀನು ವಿವೇಕಕ್ಕೆ ಲಕ್ಷಕೊಡು ವಂತೆಯೂ
5:2b.PRO.005.002 ನಿನ್ನ ತುಟಿಗಳು ತಿಳುವಳಿಕೆಯನ್ನು ಕಾಪಾಡು ವಂತೆಯೂ ನನ್ನ ಜ್ಞಾನವನ್ನು ಆಲಿಸು.
5:3b.PRO.005.003 ಪರಸ್ತ್ರೀಯ ತುಟಿಗಳು ಜೇನು ತುಪ್ಪದಂತೆ ತೊಟ್ಟಿ ರುವವು, ಅವಳ ಬಾಯಿಯು ಎಣ್ಣೆಗಿಂತಲೂ ಮೃದು ವಾಗಿದೆ.
5:4b.PRO.005.004 ಆದರೆ ಅವಳ ಅಂತ್ಯವು ಮಾಚಿ ಪತ್ರೆಯಂತೆ ಕಹಿಯೂ ಇಬ್ಬಾಯಿ ಕತ್ತಿಯಂತೆ ಹರಿತವೂ ಇರುತ್ತದೆ.
5:5b.PRO.005.005 ಅವಳ ಪಾದಗಳು ಮರಣದ ಕಡೆಗೆ ಇಳಿದು ಹೋಗು ತ್ತವೆ. ಅವಳ ಹೆಜ್ಜೆಗಳು ಪಾತಾಳವನ್ನು ಹಿಡಿಯುತ್ತವೆ.
5:6b.PRO.005.006 ಅವುಗಳನ್ನು ನೀನು ತಿಳಿದುಕೊಳ್ಳಲಾರದಂತೆ ಜೀವದ ಮಾರ್ಗವನ್ನು ನೀನು ವಿವೇಚಿಸಲಾರದಷ್ಟು ಅವಳ ಮಾರ್ಗಗಳು ಚಂಚಲವಾಗಿವೆ.
5:7b.PRO.005.007 ಆದದರಿಂದ ಓ ಮಕ್ಕಳಿರಾ, ಈಗ ನನ್ನ ಕಡೆಗೆ ಕಿವಿಗೊಡಿರಿ, ನನ್ನ ಬಾಯಿಯ ಮಾತುಗಳಿಂದ ಹೊರಟುಹೋಗಬೇಡಿರಿ.
5:8b.PRO.005.008 ಅವಳ ಕಡೆಯಿಂದ ನಿನ್ನ ದಾರಿಯನ್ನು ದೂರಮಾಡು. ಅವಳ ಮನೆಯ ಬಾಗಲ ಹತ್ತಿರಕ್ಕೆ ಬಾರದೆ ಇರು.
5:9b.PRO.005.009 ನೀನು ನಿನ್ನ ಗೌರವವನ್ನು ಬೇರೆಯವರಿಗೂ ನಿನ್ನ ವರುಷ ಗಳನ್ನು ಕ್ರೂರರಿಗೂ ಕೊಡಬೇಡ.
5:10b.PRO.005.010 ನಿನ್ನ ಸಂಪತ್ತನ್ನು ಪರರು ತುಂಬಿಕೊಳ್ಳದಂತೆಯೂ ನಿನ್ನ ಪ್ರಯಾಸಗಳು ಪರನ ಮನೆಯಲ್ಲಿ ಇರದಂತೆಯೂ ಮಾಡು.
5:11b.PRO.005.011 ನಿನ್ನ ಮಾಂಸವೂ ದೇಹವೂ ಕ್ಷೀಣಿಸಿದಾಗ ನೀನು ಕೊನೆಯಲ್ಲಿ ಶೋಕಿಸುತ್ತಾ--
5:12b.PRO.005.012 ಶಿಕ್ಷಣವನ್ನು ನಾನು ಎಷ್ಟೋ ಹಗೆಮಾಡಿದೆನು; ನನ್ನ ಹೃದಯವು ಗದರಿಕೆಯನ್ನು ತಿರಸ್ಕಾರ ಮಾಡಿತು.
5:13b.PRO.005.013 ನನ್ನ ಬೋಧ ಕರ ಸ್ವರಕ್ಕೆ ನಾನು ವಿಧೇಯನಾಗದೆ ಇಲ್ಲವೆ ಶಿಕ್ಷಕರಿಗೆ ನಾನು ಕಿವಿಗೊಡದೆ ಹೋದೆನು.
5:14b.PRO.005.014 ನಾನು ಕೂಟ ಮತ್ತು ಸಭೆಯ ಮಧ್ಯದಲ್ಲಿ ಹೆಚ್ಚು ಕಡಿಮೆ ಎಲ್ಲಾ ಕೇಡಿನಲ್ಲಿ ಇದ್ದೆನು ಎಂದು ಹೇಳುವಿ.
5:15b.PRO.005.015 ನಿನ್ನ ಸ್ವಂತ ಕೊಳದ ನೀರನ್ನು, ನಿನ್ನ ಸ್ವಂತ ಬಾವಿ ಯೊಳಗಿಂದ ಉಕ್ಕಿಬರುವ ಜಲವನ್ನು ಕುಡಿ.
5:16b.PRO.005.016 ನಿನ್ನ ಬುಗ್ಗೆಗಳು ಹೊರಗೆ ಮತ್ತು ನೀರಿನ ನದಿಗಳು ಬೀದಿ ಗಳಲ್ಲಿ ಹರಡಿಹೋಗಲಿ.
5:17b.PRO.005.017 ಅವು ನಿನ್ನ ಸ್ವಂತದವು ಗಳಾಗಿಯೇ ಇರಲಿ. ನಿನ್ನೊಂದಿಗಿರುವ ಪರರಿಗೆ ಇಲ್ಲ ದಿರಲಿ.
5:18b.PRO.005.018 ನಿನ್ನ ಬುಗ್ಗೆಯು ಆಶೀರ್ವದಿಸಲ್ಪಡಲಿ; ನಿನ್ನ ಯೌವನ ಕಾಲದ ಹೆಂಡತಿಯೊಂದಿಗೆ ಆನಂದಿಸು.
5:19b.PRO.005.019 ಆಕೆಯು ಮನೋಹರವಾದ ಜಿಂಕೆಯಂತೆಯೂ ಅಂದವಾದ ಹೆಣ್ಣು ಜಿಂಕೆಯ ಹಾಗೆಯೂ ಇರಲಿ; ಆಕೆಯ ಸ್ತನಗಳು ನಿನ್ನನ್ನು ಯಾವಾಗಲೂ ತೃಪ್ತಿಪಡಿ ಸಲಿ; ಆಕೆಯ ಪ್ರೀತಿಯಿಂದ ನೀನು ಯಾವಾಗಲೂ ಆನಂದಪರವಶನಾಗು.
5:20b.PRO.005.020 ನನ್ನ ಮಗನೇ, ಪರಸ್ತ್ರೀ ಯಲ್ಲಿ ನೀನು ಯಾಕೆ ಆನಂದ ಪರವಶನಾಗಿ ಅವಳ ಎದೆಯನ್ನು ಅಪ್ಪಿಕೊಳ್ಳುವಿ?
5:21b.PRO.005.021 ಮನುಷ್ಯನ ಮಾರ್ಗ ಗಳು ಕರ್ತನ ಕಣ್ಣುಗಳ ಮುಂದೆಯೇ ಅವೆ; ಆತನು ಅವನ ಮಾರ್ಗಗಳನ್ನೆಲ್ಲಾ ಪರೀಕ್ಷಿಸುತ್ತಾನೆ.
5:22b.PRO.005.022 ದುಷ್ಟ ನನ್ನು ಅವನ ಸ್ವಂತ ಅಕ್ರಮಗಳೇ ಹಿಡಿಯುವವು; ತನ್ನ ಪಾಪಗಳ ಪಾಶಗಳಿಂದಲೇ ಅವನು ಬಂಧಿಸಲ್ಪಡು ವನು.ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು.
5:23b.PRO.005.023 ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು.
6
6:1b.PRO.006.001 ನನ್ನ ಮಗನೇ, ನಿನ್ನ ಸ್ನೇಹಿತನಿಗಾಗಿ ನೀನು ಹೊಣೆಯಾಗಿದ್ದರೆ ಪರನೊಂದಿಗೆ ನಿನ್ನ ಕೈಯನ್ನು ಒಡ್ಡಿದ್ದರೆ
6:2b.PRO.006.002 ನಿನ್ನ ಬಾಯಿ ಮಾತುಗಳಿಂದ ನೀನು ಸಿಕ್ಕಿಕೊಂಡಿದ್ದೀ. ನಿನ್ನ ಬಾಯಿ ಮಾತುಗಳಿಂದಲೇ ನೀನು ಹಿಡಿಯಲ್ಪಟ್ಟಿದ್ದೀ.
6:3b.PRO.006.003 ನನ್ನ ಮಗನೇ, ನಿನ್ನ ಸ್ನೇಹಿತನ ಕೈಗೆ ಸಿಕ್ಕಿದಾಗ ತಪ್ಪಿಸಿಕೊಳ್ಳಲು ಇದನ್ನು ಮಾಡು. ಹೋಗಿ ನಿನ್ನನ್ನು ನೀನು ತಗ್ಗಿಸಿಕೊಂಡು ನಿನ್ನ ಸ್ನೇಹಿತನಿಗೆ ಹೊಣೆಯಾಗು.
6:4b.PRO.006.004 ನಿನ್ನ ಕಣ್ಣುಗಳಿಗೆ ನಿದ್ರೆಯನ್ನೂ ರೆಪ್ಪೆಗಳಿಗೆ ತೂಕಡಿಕೆಯನ್ನೂ ಕೊಡಬೇಡ.
6:5b.PRO.006.005 ಬೇಟೆ ಗಾರನ ಕೈಯಿಂದ ಜಿಂಕೆಯೂ ಪಕ್ಷಿಯೂ ತಪ್ಪಿಸಿಕೊಳ್ಳು ವಂತೆ ತಪ್ಪಿಸಿಕೋ.
6:6b.PRO.006.006 ಸೋಮಾರಿಯೇ, ನೀನು ಇರುವೆಯ ಹತ್ತಿರ ಹೋಗಿ ಅದರ ಮಾರ್ಗಗಳನ್ನು ಆಲೋಚಿಸಿ ಜ್ಞಾನ ವಂತನಾಗಿರು.
6:7b.PRO.006.007 ನಾಯಕನಾಗಲಿ ಮೇಲ್ವಿಚಾರಕನಾ ಗಲಿ ಅಧಿಕಾರಿಯಾಗಲಿ ಅದಕ್ಕೆ ಇಲ್ಲದೆ ಹೋದರೂ
6:8b.PRO.006.008 ಬೇಸಿಗೆಯಲ್ಲಿ ಅದು ತನ್ನ ಅಹಾರವನ್ನು ಸಂಗ್ರಹಿಸಿ ಕೊಂಡು ಸುಗ್ಗಿಯಲ್ಲಿ ತನ್ನ ಆಹಾರವನ್ನು ಕೂಡಿಸಿ ಕೊಳ್ಳುವದು.
6:9b.PRO.006.009 ಓ ಸೋಮಾರಿಯೇ, ಎಷ್ಟು ಹೊತ್ತು ನೀನು ನಿದ್ರೆಮಾಡುವದು? ನಿನ್ನ ನಿದ್ರೆಯಿಂದ ಯಾವಾ ಗ ಎಚ್ಚರಗೊಳ್ಳುವಿ?
6:10b.PRO.006.010 ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ತೂಕಡಿಕೆ, ನಿದ್ರೆಗಾಗಿ ಇನ್ನೂ ಸ್ವಲ್ಪ ಕೈ ಮುದುರಿ ಕೊಳ್ಳುವಿ?
6:11b.PRO.006.011 ಹೀಗೆ ದಾರಿದ್ರ್ಯವು ಪ್ರಯಾಣ ಮಾಡು ವವನ ಹಾಗೂ ನಿನ್ನ ಕೊರತೆಯು ಯುದ್ಧಸ್ಥರ ಹಾಗೂ ಬರುವದು.
6:12b.PRO.006.012 ದುಷ್ಟನೂ ಕೆಡುಕನೂ ವಕ್ರಬಾಯಿಂದ ನಡೆದು ಕೊಳ್ಳುವನು.
6:13b.PRO.006.013 ಅವನು ತನ್ನ ಕಣ್ಣುಗಳಿಂದ ಸನ್ನೆಮಾಡಿ ತನ್ನ ಕಾಲುಗಳಿಂದ ಮಾತಾಡುತ್ತಾ ತನ್ನ ಬೆರಳುಗಳಿಂದ ಬೋಧಿಸುತ್ತಾನೆ.
6:14b.PRO.006.014 ಅವನ ಹೃದಯದಲ್ಲಿ ಮೂರ್ಖ ತನವಿದೆ. ಯಾವಾಗಲೂ ಅವನು ಕೇಡನ್ನು ಕಲ್ಪಿಸು ತ್ತಾನೆ. ಅವನು ವೈಷಮ್ಯವನ್ನು ಬಿತ್ತುತ್ತಾನೆ.
6:15b.PRO.006.015 ಆದದ ರಿಂದ ಅವನಿಗೆ ತಕ್ಷಣವೇ ವಿಪತ್ತು ಬರುವದು; ತಕ್ಷ ಣವೇ ಯಾವ ಪರಿಹಾರವಿಲ್ಲದೆ ಅವನು ಮುರಿಯಲ್ಪ ಡುವನು.
6:16b.PRO.006.016 ಈ ಆರು ವಿಷಯಗಳನ್ನು ಕರ್ತನು ಹಗೆಮಾಡುತ್ತಾನೆ; ಹೌದು, ಏಳು ಆತನಿಗೆ ಅಸಹ್ಯವಾಗಿವೆ; ಯಾವವಂದರೆ:
6:17b.PRO.006.017 ಹೆಮ್ಮೆಯ ದೃಷ್ಟಿ, ಸುಳ್ಳಾ ಡುವ ನಾಲಿಗೆ, ನಿರ್ದೋಷ ರಕ್ತವನ್ನು ಸುರಿಸುವ ಕೈಗಳು,
6:18b.PRO.006.018 ದುಷ್ಟ ಭಾವನೆಗಳನ್ನು ಕಲ್ಪಿಸುವ ಹೃದಯ, ಕೇಡಿಗೆ ಓಡಾಡುವದರಲ್ಲಿ ತ್ವರೆಪಡುವ ಕಾಲುಗಳು,
6:19b.PRO.006.019 ಅಸತ್ಯಗಳನ್ನು ಆಡುವ ಸುಳ್ಳು ಸಾಕ್ಷಿ ಮತ್ತು ಸಹೋ ದರರಲ್ಲಿ ವೈಷಮ್ಯವನ್ನು ಬಿತ್ತುವವನು.
6:20b.PRO.006.020 ನನ್ನ ಮಗನೇ, ನಿನ್ನ ತಂದೆಯ ಆಜ್ಞೆಯನ್ನು ಕೈಕೊಳ್ಳು, ತಾಯಿಯ ಕಟ್ಟಳೆಯನ್ನು ತ್ಯಜಿಸಬೇಡ.
6:21b.PRO.006.021 ಅವುಗಳನ್ನು ಯಾವಾಗಲೂ ನಿನ್ನ ಹೃದಯಕ್ಕೆ ಬಂಧಿಸು. ನಿನ್ನ ಕಂಠಕ್ಕೆ ಕಟ್ಟಿಕೋ.
6:22b.PRO.006.022 ನೀನು ಹೋಗು ವಾಗ ಅದು ನಿನ್ನನ್ನು ನಡಿಸುವದು; ಮಲಗುವಾಗ ನಿನ್ನನ್ನು ಕಾಯುವದು; ಎಚ್ಚರಗೊಂಡಾಗ ನಿನ್ನೊಂದಿಗೆ ಮಾತಾಡುವದು.
6:23b.PRO.006.023 ಆಜ್ಞೆಯು ದೀಪವಾಗಿದೆ, ಕಟ್ಟ ಳೆಯು ಬೆಳಕಾಗಿದೆ; ಶಿಕ್ಷಣದ ಗದರಿಕೆಗಳು ಜೀವದ ಮಾರ್ಗವಾಗಿವೆ.
6:24b.PRO.006.024 ಕೆಟ್ಟ ಹೆಂಗಸಿನಿಂದಲೂ ಪರ ಸ್ತ್ರೀಯ ನಾಲಿಗೆಯ ಮುಖಸ್ತುತಿಯಿಂದಲೂ ಅವು ನಿನ್ನನ್ನು ಕಾಪಾಡುವವು.
6:25b.PRO.006.025 ನಿನ್ನ ಹೃದಯದಲ್ಲಿ ಅವಳ ಸೌಂದರ್ಯವನ್ನು ಮೋಹಿಸಬೇಡ; ಇದಲ್ಲದೆ ಅವಳ ಕಣ್ಣುರೆಪ್ಪೆಗಳಿಂದ ನಿನ್ನನ್ನು ಅವಳು ವಶಮಾಡಿಕೊಳ್ಳದೆ ಇರಲಿ.
6:26b.PRO.006.026 ಒಬ್ಬ ವೇಶ್ಯೆಯ ಮೂಲಕ ಮನುಷ್ಯನು ರೊಟ್ಟಿಯ ತುಂಡಿಗೆ ಈಡಾಗುವನು; ವ್ಯಭಿಚಾರಿಣಿಯು ಅಮೂಲ್ಯವಾದ ಜೀವವನ್ನು ಬೇಟೆಯಾಡುವಳು.
6:27b.PRO.006.027 ಒಬ್ಬನು ತನ್ನ ಮಡಿಲಲ್ಲಿ ಬೆಂಕಿಯನ್ನು ತೆಗೆದು ಕೊಂಡರೆ ಅವನ ವಸ್ತ್ರಗಳು ಸುಡುವದಿಲ್ಲವೋ?
6:28b.PRO.006.028 ಒಬ್ಬನು ಧಗಧಗಿಸುವ ಕೆಂಡಗಳ ಮೇಲೆ ನಡೆದರೆ ಅವನ ಪಾದಗಳು ಸುಡುವದಿಲ್ಲವೋ?
6:29b.PRO.006.029 ತನ್ನ ನೆರೆಯವನ ಹೆಂಡತಿಯನ್ನು ಕೂಡುವವನು ಹೀಗೆಯೇ ಇರುವನು; ಅವಳನ್ನು ಮುಟ್ಟುವ ಯಾವನೂ ನಿರಪ ರಾಧಿಯಾಗಿ ಇರನು.
6:30b.PRO.006.030 ಹಸಿದಾಗ ಕಳ್ಳನು ತನ್ನ ಪ್ರಾಣವನ್ನು ತೃಪ್ತಿಪಡಿಸುವದಕ್ಕೆ ಕಳವು ಮಾಡಿದರೆ ಜನರು ಅವನನ್ನು ಹೀಯಾಳಿಸುವದಿಲ್ಲ.
6:31b.PRO.006.031 ಅವನು ಸಿಕ್ಕಿಕೊಂಡರೆ ಏಳರಷ್ಟು ಹಿಂದಕ್ಕೆ ಕೊಡುವನು; ತನ್ನ ಮನೆಯ ಆಸ್ತಿಯನ್ನೆಲ್ಲಾ ಅವನು ಕೊಡುವನು.
6:32b.PRO.006.032 ಒಬ್ಬ ಸ್ತ್ರೀಯೊಂದಿಗೆ ವ್ಯಭಿಚಾರ ಮಾಡುವವನು ವಿವೇಕವಿಲ್ಲದವನಾಗಿದ್ದಾನೆ. ಅದನ್ನು ಮಾಡುವವನು ತನ್ನ ಪ್ರಾಣವನ್ನೇ ನಾಶಪಡಿಸಿಕೊಳ್ಳುವನು.
6:33b.PRO.006.033 ಅವ ನಿಗೆ ಗಾಯವೂ ಅವಮಾನವೂ ಆಗುವವು; ಅವನ ನಿಂದೆಯು ಎಂದಿಗೂ ಅಳಿಸಲ್ಪಡದು.
6:34b.PRO.006.034 ಮನುಷ್ಯನ ಕ್ರೋಧವು ಮತ್ಸರವಾಗಿದೆ; ಆದದರಿಂದ ಮುಯ್ಯಿ ತೀರಿಸುವ ದಿನದಲ್ಲಿ ಅವನು ಕ್ಷಮೆತೋರುವದಿಲ್ಲ.ಅವನು ಯಾವ ಈಡನ್ನು ಲಕ್ಷಿಸುವದಿಲ್ಲ; ಇದ ಲ್ಲದೆ ನೀನು ಎಷ್ಟು ಲಂಚಕೊಟ್ಟರೂ ಅವನು ಒಪ್ಪುವದಿಲ್ಲ.
6:35b.PRO.006.035 ಅವನು ಯಾವ ಈಡನ್ನು ಲಕ್ಷಿಸುವದಿಲ್ಲ; ಇದ ಲ್ಲದೆ ನೀನು ಎಷ್ಟು ಲಂಚಕೊಟ್ಟರೂ ಅವನು ಒಪ್ಪುವದಿಲ್ಲ.
7
7:1b.PRO.007.001 ನನ್ನ ಮಗನೇ, ನನ್ನ ಮಾತುಗಳನ್ನು ಅನುಸರಿಸಿ ನನ್ನ ಆಜ್ಞೆಗಳನ್ನು ನಿನ್ನಲ್ಲಿ ಇಟ್ಟುಕೋ.
7:2b.PRO.007.002 ನನ್ನ ಅಜ್ಞೆಗಳನ್ನು ಅನುಸರಿಸಿ ಬಾಳು; ನಿನ್ನ ಕಣ್ಣು ಗುಡ್ಡೆಯಂತೆ ನನ್ನ ಕಟ್ಟಳೆಯನ್ನು ಕಾಪಾಡು.
7:3b.PRO.007.003 ಅವುಗ ಳನ್ನು ನಿನ್ನ ಬೆರಳುಗಳಿಗೆ ಕಟ್ಟಿಕೋ, ನಿನ್ನ ಹೃದಯದ ಹಲಗೆಯಲ್ಲಿ ಅವುಗಳನ್ನು ಬರೆ.
7:4b.PRO.007.004 ಜ್ಞಾನಕ್ಕೆ--ನೀನು ನನ್ನ ಸಹೋದರಿ ಎಂದೂ ವಿವೇಕವು ನನ್ನ ಬಂಧು ಎಂದೂ ಹೇಳು;
7:5b.PRO.007.005 ಪರಸ್ತ್ರೀಯಿಂದಲೂ ತನ್ನ ಮಾತು ಗಳಿಂದ ಮುಖಸ್ತುತಿ ಮಾಡುವ ಅನ್ಯಳಿಂದಲೂ ಅವು ನಿನ್ನನ್ನು ಕಾಪಾಡುವವು.
7:6b.PRO.007.006 ನನ್ನ ಮನೆಯ ಕಿಟಿಕಿಯ ಜಾಲರಿಯಿಂದ ದೃಷ್ಟಿ ಸುವವನಾಗಿ ಜ್ಞಾನಹೀನರಾದವರಲ್ಲಿ ನೋಡಿದಾಗ
7:7b.PRO.007.007 ಯುವಕರ ಮಧ್ಯದಲ್ಲಿ ತಿಳುವಳಿಕೆಯಿಲ್ಲದ ಒಬ್ಬ ಯೌವನಸ್ಥನನ್ನು ಕಂಡೆನು.
7:8b.PRO.007.008 ಅವನು ಅವಳ ಮೂಲೆಯ ಬೀದಿಯಿಂದ ಹಾದುಹೋಗುತ್ತಾ
7:9b.PRO.007.009 ಸಂಜೆಯ ಮೊಬ್ಬಿನಲ್ಲಿ ಗಾಡಾಂಧಕಾರದಲ್ಲಿ ಅವಳ ಮನೆಗೆ ಹೋದನು.
7:10b.PRO.007.010 ಇಗೋ, ವೇಶ್ಯಳ ವಸ್ತ್ರವನ್ನು ಧರಿಸಿ ಕೊಂಡು ಒಬ್ಬ ಕಪಟ ಸ್ತ್ರೀಯು ಅವನನ್ನು ಎದುರು ಗೊಂಡಳು.
7:11b.PRO.007.011 (ಅವಳು ಕೂಗಾಡುವವಳು, ಹಠ ಮಾರಿ; ಅವಳ ಪಾದಗಳು ಮನೆಯಲ್ಲಿ ನಿಲ್ಲುವದಿಲ್ಲ.
7:12b.PRO.007.012 ಒಂದು ಸಮಯದಲ್ಲಿ ಅವಳು ಹೊರಗೆ ಮತ್ತೊಂದು ಸಮಯದಲ್ಲಿ ಬೀದಿಗಳಲ್ಲಿ ಪ್ರತಿಯೊಂದು ಮೂಲೆ ಯಲ್ಲಿ ಹೊಂಚುಹಾಕುವಳು).
7:13b.PRO.007.013 ಹೀಗೆ ಅವಳು ಅವ ನನ್ನು--ಹಿಡುಕೊಂಡು ಮುದ್ದಿಟ್ಟು
7:14b.PRO.007.014 ನಾಚಿಕೆಯಿಲ್ಲದೆ --ನನ್ನಲ್ಲಿ ಸಮಾಧಾನ ಅರ್ಪಣೆಗಳು ಇವೆ; ಈ ದಿವಸ ನನ್ನ ಪ್ರಮಾಣಗಳನ್ನು ನಾನು ಸಲ್ಲಿಸಿದ್ದೇನೆ.
7:15b.PRO.007.015 ಆದಕಾರಣ ನಾನು ನಿನ್ನನ್ನು ಎದುರುಗೊಳ್ಳುವದಕ್ಕೆ ಬಂದೆನು; ಅತ್ಯಾಶೆಯಿಂದ ನಿನ್ನನ್ನು ತ್ರೀವ್ರವಾಗಿ ಹುಡು ಕುವದಕ್ಕೆ ಬಂದು ನಿನ್ನನ್ನು ಕಂಡುಕೊಂಡಿದ್ದೇನೆ.
7:16b.PRO.007.016 ಚಿತ್ರವಾಗಿ ನೇಯ್ದ ವಸ್ತುಗಳಿಂದಲೂ ವಿಚಿತ್ರ ವಸ್ತು ಗಳಿಂದಲೂ ಐಗುಪ್ತದ ನಯವಾದ ನಾರುಮಡಿ ಯಿಂದಲೂ ನನ್ನ ಹಾಸಿಗೆಯನ್ನು ಅಲಂಕರಿಸಿದ್ದೇನೆ.
7:17b.PRO.007.017 ರಕ್ತಬೋಳ ಅಗರು ಲವಂಗ ಚೆಕ್ಕೆಗಳಿಂದ ನನ್ನ ಹಾಸಿಗೆಯನ್ನು ಸುವಾಸನೆ ಗೊಳಿಸಿದ್ದೇನೆ.
7:18b.PRO.007.018 ಬಾ, ಬೆಳಗಿನ ವರೆಗೂ ತೃಪ್ತಿಯಾಗುವ ತನಕ ಪ್ರೀತಿಯ ವಶದಲ್ಲಿ ತುಂಬಿಕೊಳ್ಳುವ ಕಾಮ ವಿಲಾಸಗಳಿಂದ ನಮ್ಮನ್ನು ನಾವು ಆದರಿಸಿಕೊಳ್ಳೋಣ.
7:19b.PRO.007.019 ಯಜಮಾ ನನು ಮನೆಯಲ್ಲಿ ಇಲ್ಲ; ಅವನು ದೀರ್ಘದ ಪ್ರಯಾಣ ಕೈಕೊಂಡಿದ್ದಾನೆ.
7:20b.PRO.007.020 ಅವನು ತನ್ನೊಂದಿಗೆ ಹಣದ ಚೀಲವನ್ನು ತೆಗೆದುಕೊಂಡು ಹೋಗಿದ್ದಾನೆ; ನೇಮಕ ವಾದ ದಿನದಲ್ಲಿಯೇ ಅವನು ಈ ಮನೆಗೆ ಬರುವವನಾ ಗಿದ್ದಾನೆ ಎಂದು
7:21b.PRO.007.021 ಬಹಳವಾದ ತನ್ನ ಸವಿಮಾತಿನಿಂದ ಅವಳು ಅವನನ್ನು ಒಪ್ಪಿಸಿ ತನ್ನ ತುಟಿಗಳ ಮುಖಸ್ತುತಿ ಯಿಂದ ಅವನನ್ನು ಬಲಾತ್ಕರಿಸಿದಳು.
7:22b.PRO.007.022 ಎತ್ತು ವಧೆಯ ಸ್ಥಾನಕ್ಕೆ ಹೋಗುವಂತೆ ಇಲ್ಲವೆ ಮೂರ್ಖನು ಶಿಕ್ಷೆಯ ದಂಡನೆಗೆ ಹೋಗುವಂತೆ
7:23b.PRO.007.023 ಒಂದು ಬಾಣವು ತನ್ನ ಕಾಳಿಜವನ್ನು ತಿವಿಯುವ ವರೆಗೆ ತನ್ನ ಪ್ರಾಣಕ್ಕಾಗಿ ಬಲೆಯನ್ನು ಒಡ್ಡಿದ್ದಾನೆಂದು ತಿಳಿಯದೆ ಪಕ್ಷಿಯು ಬಲೆಯ ಕಡೆಗೆ ಓಡುವ ಹಾಗೆ ಅವನು ತಟ್ಟನೆ ಅವಳ ಹಿಂದೆ ಹೋಗುತ್ತಾನೆ.
7:24b.PRO.007.024 ಆದುದರಿಂದ ಓ ನನ್ನ ಮಕ್ಕಳಿರಾ, ನನ್ನ ಕಡೆಗೆ ಕಿವಿಗೊಡಿರಿ; ನನ್ನ ಬಾಯಿಯ ಮಾತುಗಳನ್ನು ಆಲಿಸಿರಿ.
7:25b.PRO.007.025 ಅವಳ ಮಾರ್ಗಗಳಿಗೆ ನಿನ್ನ ಹೃದಯವು ತಿರುಗದೆ ಇರಲಿ. ಅವಳ ದಾರಿಗಳಲ್ಲಿ ತಪ್ಪಿಹೋಗದೆ ಇರಲಿ.
7:26b.PRO.007.026 ಬಹು ಜನರನ್ನು ಅವಳು ಗಾಯಪಡಿಸಿ ಬೀಳಿಸಿ ದ್ದಾಳೆ; ಹೌದು, ಬಲಿಷ್ಠರಾದ ಅನೇಕ ಪುರುಷರು ಅವಳಿಂದ ಹತರಾಗಿದ್ದಾರೆ.ಅವಳ ಮನೆಯು ಪಾತಾಳದ ದಾರಿ, ಅದು ಮೃತ್ಯುವಿನ ಕೊಠಡಿಗೆ ಇಳಿದುಹೋಗುತ್ತದೆ.
7:27b.PRO.007.027 ಅವಳ ಮನೆಯು ಪಾತಾಳದ ದಾರಿ, ಅದು ಮೃತ್ಯುವಿನ ಕೊಠಡಿಗೆ ಇಳಿದುಹೋಗುತ್ತದೆ.
8
8:1b.PRO.008.001 ಜ್ಞಾನವು ಕೂಗುತ್ತದಲ್ಲವೋ? ಮತ್ತು ತಿಳುವಳಿಕೆಯು ತನ್ನ ಸ್ವರವನ್ನು ಕೇಳುವಂತೆ ಮಾಡುತ್ತದಲ್ಲವೋ?
8:2b.PRO.008.002 ಉನ್ನತ ಸ್ಥಳಗಳ ತುದಿಯ ಲ್ಲಿಯೂ ಹಾದಿಗಳ ಸ್ಥಳಗಳಲ್ಲಿಯೂ ಮಾರ್ಗದ ಲ್ಲಿಯೂ ನಿಂತುಕೊಳ್ಳುತ್ತದೆ.
8:3b.PRO.008.003 ದ್ವಾರಗಳ ಬಳಿಯ ಪಟ್ಟ ಣದ ಪ್ರವೇಶದಲ್ಲಿಯೂ ಒಳಗೆ ಬರುವ ಬಾಗಲು ಗಳಲ್ಲಿಯೂ ಆಕೆ ಕೂಗುವದೇನಂದರೆ--
8:4b.PRO.008.004 ಓ ಮನು ಷ್ಯರೇ, ನಿಮ್ಮನ್ನೇ ನಾನು ಕರೆಯುತ್ತೇನೆ; ಮನುಷ್ಯ ಪುತ್ರರಿಗೆ ನನ್ನ ಸ್ವರವು ಇರುತ್ತದೆ.
8:5b.PRO.008.005 ಓ ಜ್ಞಾನಹೀನರೇ, ಜ್ಞಾನವನ್ನು ಗ್ರಹಿಸಿರಿ; ಬುದ್ಧಿಹೀನರೇ, ನೀವು ತಿಳು ವಳಿಕೆಯ ಹೃದಯದವರಾಗಿರ್ರಿ.
8:6b.PRO.008.006 ಕೇಳಿರಿ, ಉತ್ಕ್ರಷ್ಟ ವಾದ ಸಂಗತಿಗಳನ್ನು ನಾನು ಮಾತಾಡುವೆನು; ನ್ಯಾಯ ವಾದ ಸಂಗತಿಗಳಿಗಾಗಿ ನನ್ನ ತುಟಿಗಳನ್ನು ತೆರೆಯು ವೆನು.
8:7b.PRO.008.007 ನನ್ನ ಬಾಯಿಯು ಸತ್ಯವನ್ನು ಮಾತಾಡುವದು; ನನ್ನ ತುಟಿಗಳಿಗೆ ಕೆಟ್ಟತನವು ಅಸಹ್ಯವಾಗಿದೆ.
8:8b.PRO.008.008 ನನ್ನ ಬಾಯಿಯ ಮಾತುಗಳೆಲ್ಲಾ ನೀತಿಯಲ್ಲಿವೆ; ಮೂರ್ಖ ತನವಾಗಲಿ ವಕ್ರತೆಯಾಗಲಿ ಅವುಗಳಲ್ಲಿ ಇಲ್ಲ.
8:9b.PRO.008.009 ಗ್ರಹಿ ಸುವವನಿಗೆ ಅವು ಸ್ಪಷ್ಟವಾಗಿಯೂ ತಿಳುವಳಿಕೆಯನ್ನು ಕಂಡುಕೊಳ್ಳುವವನಿಗೆ ಅವು ನ್ಯಾಯವಾಗಿಯೂ ಇವೆ.
8:10b.PRO.008.010 ಬೆಳ್ಳಿಯನ್ನಲ್ಲ, ನನ್ನ ಶಿಕ್ಷಣವನ್ನೂ ಆಯಲ್ಪಟ್ಟ ಬಂಗಾ ರಕ್ಕಿಂತ ತಿಳುವಳಿಕೆಯನ್ನೂ ಪಡೆದುಕೋ.
8:11b.PRO.008.011 ಮಾಣಿಕ್ಯ ಗಳಿಗಿಂತ ಜ್ಞಾನವು ಉತ್ತಮ, ಅಪೇಕ್ಷಿಸಲ್ಪಡತಕ್ಕ ಎಲ್ಲಾ ವಸ್ತುಗಳು ಅದಕ್ಕೆ ಹೋಲಿಸುವದಕ್ಕಾಗದು.
8:12b.PRO.008.012 ಜ್ಞಾನ ವೆಂಬ ನಾನು ವಿವೇಕದೊಂದಿಗೆ ವಾಸವಾಗಿದ್ದೇನೆ. ಯುಕ್ತಿಯುಳ್ಳ ಕಲ್ಪನಾ ಶಕ್ತಿಯ ತಿಳುವಳಿಕೆಯನ್ನು ನಾನು ಕಂಡುಕೊಳ್ಳುತ್ತೇನೆ.
8:13b.PRO.008.013 ಕರ್ತನ ಭಯವು ದುಷ್ಟತ್ವವನ್ನು ಹಗೆಮಾಡುವದು; ಗರ್ವ ಅಹಂಭಾವ ಕೆಟ್ಟದಾರಿ ಮೂರ್ಖನಬಾಯಿ ಇವುಗಳನ್ನು ನಾನು ಹಗೆಮಾಡು ತ್ತೇನೆ.
8:14b.PRO.008.014 ಆಲೋಚನೆಯೂ ಸುಜ್ಞಾನವೂ ನನ್ನವು; ವಿವೇಕವು ನಾನೇ. ನನಗೆ ಸಾಮರ್ಥ್ಯವಿದೆ.
8:15b.PRO.008.015 ನನ್ನ ಮೂಲಕ ರಾಜರು ಆಳುವರು. ಪ್ರಧಾನರು ತೀರ್ಪು ಕೊಡುವರು.
8:16b.PRO.008.016 ನನ್ನಿಂದ ಅಧಿಪತಿಗಳೂ ಕೀರ್ತಿವಂತರೂ ಭೂಮಿಯ ಎಲ್ಲಾ ನ್ಯಾಯಾಧಿಪತಿಗಳೂ ಆಳುವರು.
8:17b.PRO.008.017 ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ. ಶೀಘ್ರವಾಗಿ ನನ್ನನ್ನು ಹುಡುಕುವವರು ನನ್ನನ್ನು ಕಂಡುಕೊಳ್ಳುವರು.
8:18b.PRO.008.018 ಐಶ್ವರ್ಯವೂ ಘನತೆಯೂ ಹೌದು, ಶ್ರೇಷ್ಠ ಸಂಪತ್ತೂ ನೀತಿಯೂ ನನ್ನೊಂದಿಗಿವೆ.
8:19b.PRO.008.019 ನನ್ನ ಫಲವು ಬಂಗಾರಕ್ಕಿಂತಲೂ ಹೌದು, ಚೊಕ್ಕ ಬಂಗಾರಕ್ಕಿಂತಲೂ ನನ್ನ ಆದಾಯವು ಆಯಲ್ಪಟ್ಟ ಬೆಳ್ಳಿಗಿಂತಲೂ ಶ್ರೇಷ್ಠವಾಗಿದೆ.
8:20b.PRO.008.020 ನೀತಿಯ ಮಾರ್ಗದಲ್ಲಿ ನ್ಯಾಯದ ದಾರಿಗಳ ಮಧ್ಯದಲ್ಲಿ ನಾನು ನಡಿಸುತ್ತೇನೆ.
8:21b.PRO.008.021 ನನ್ನನ್ನು ಪ್ರೀತಿಸುವವರು ಸಂಪತ್ತನ್ನು ಬಾಧ್ಯವಾಗಿ ಹೊಂದಿದಂತೆ ನಾನು ಅವರ ಬೊಕ್ಕಸ ಗಳನ್ನು ತುಂಬಿಸುವೆನು.
8:22b.PRO.008.022 ತನ್ನ ಮಾರ್ಗದ ಹಾದಿಯಲ್ಲಿ ಆತನ ಪುರಾತನ ಕಾರ್ಯಗಳಿಗಿಂತ ಮೊದಲು ಕರ್ತನು ನನ್ನನ್ನು ಪಡೆದು ಕೊಂಡಿದ್ದನು.
8:23b.PRO.008.023 ನಿತ್ಯತ್ವದಿಂದ ಇಲ್ಲವೆ ಆರಂಭದಿಂದ, ಭೂಮಿಯು ಇರುವದಕ್ಕೆ ಮುಂಚೆ ನಾನು ಸ್ಥಾಪಿಸಲ್ಪ ಟ್ಟೆನು.
8:24b.PRO.008.024 ಅಗಾಧಗಳು ಇಲ್ಲದೆ ಇರುವಾಗ, ನೀರಿನಿಂದ ಸಮೃದ್ಧಿಯಾದ ಬುಗ್ಗೆಗಳು ಇಲ್ಲದೆ ಇರುವಾಗ ನಾನು ಉಂಟುಮಾಡಲ್ಪಟ್ಟೆನು.
8:25b.PRO.008.025 ಬೆಟ್ಟಗುಡ್ಡಗಳು ಸ್ಥಾಪಿಸಲ್ಪ ಡುವದಕ್ಕಿಂತ ಮುಂಚೆ
8:26b.PRO.008.026 ಭೂಮಿಯನ್ನೂ ಹೊಲ ಗಳನ್ನೂ ಲೋಕದ ಅತ್ಯಧಿಕ ಭಾಗದ ಧೂಳನ್ನೂ ಆತನು ಇನ್ನು ನಿರ್ಮಿಸದೆ ಇರುವಾಗಲೇ ನಾನು ಉಂಟು ಮಾಡಲ್ಪಟ್ಟೆನು.
8:27b.PRO.008.027 ಆತನು ಆಕಾಶಗಳನ್ನು ಸಿದ್ಧಪಡಿಸಿದಾಗ ಅಗಾಧದ ಮೇಲೆ ಚಕ್ರವನ್ನು ಹಾಕಿ ದಾಗ
8:28b.PRO.008.028 ಮೇಲೆ ಮೇಘಗಳನ್ನು ಆತನು ಸ್ಥಾಪಿಸಿದಾಗ ಅಗಾಧದ ಬುಗ್ಗೆಗಳನ್ನು ಆತನು ಬಲಪಡಿಸಿದಾಗ
8:29b.PRO.008.029 ಪ್ರವಾಹಗಳು ತನ್ನ ಆಜ್ಞೆಯನ್ನು ವಿಾರದಂತೆ ಸಮು ದ್ರಕ್ಕೆ ಆತನು ನಿಯಮವನ್ನು ಕೊಟ್ಟಿದಾಗ ಭೂಮಿಯ ಅಸ್ತಿವಾರಗಳನ್ನು ಆತನು ನೇಮಿಸಿದಾಗ ನಾನು ಆತ ನೊಂದಿಗೆ ಇದ್ದೆನು.
8:30b.PRO.008.030 ಆಗ ಆತನೊಂದಿಗೆ ಬೆಳೆದ ವನಂತೆ ಆತನ ಹತ್ತಿರ ಇದ್ದೆನು; ದಿನಾಲು ನಾನು ಆತನ ಆನಂದವಾಗಿ ಆತನ ಮುಂದೆ ಯಾವಾಗಲೂ ಸಂತೋಷಿಸುತ್ತಿದ್ದೆನು.
8:31b.PRO.008.031 ಆತನ ಭೂಮಿಯ ವಾಸ ಸ್ಥಳದ ಭಾಗದಲ್ಲಿ ಸಂತೋಷಿಸುತ್ತಿದ್ದೆನು. ಮನುಷ್ಯರ ಕುಮಾರರೊಂದಿಗೆ ನನ್ನ ಆನಂದವಿದ್ದಿತು.
8:32b.PRO.008.032 ಆದದರಿಂದ ಓ ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ; ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರು.
8:33b.PRO.008.033 ಶಿಕ್ಷಣವನ್ನು ಕೇಳಿ ಅದನ್ನು ತಿರಸ್ಕರಿಸದೇ ಜ್ಞಾನವಂತರಾಗಿರ್ರಿ.
8:34b.PRO.008.034 ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನ ಕಾಯುತ್ತಾ ನನ್ನ ಬಾಗಲುಗಳ ನಿಲುವು ಗಳಲ್ಲಿ ನಿರೀಕ್ಷಿಸುತ್ತಾ ನನ್ನ ಮಾತುಗಳನ್ನು ಕೇಳುವವನು ಧನ್ಯನು.
8:35b.PRO.008.035 ನನ್ನನ್ನು ಕಂಡುಕೊಳ್ಳುವವನು ಜೀವವನ್ನು ಕಂಡುಕೊಂಡು ಕರ್ತನ ದಯವನ್ನು ಹೊಂದುವನು.ಆದರೆ ನನಗೆ ವಿರೋಧವಾಗಿ ಪಾಪಮಾಡುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ. ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.
8:36b.PRO.008.036 ಆದರೆ ನನಗೆ ವಿರೋಧವಾಗಿ ಪಾಪಮಾಡುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ. ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.
9
9:1b.PRO.009.001 ಜ್ಞಾನವೆಂಬಾಕೆಯು ತನ್ನ ಮನೆಯನ್ನು ಕಟ್ಟಿ ಕೊಂಡಿದ್ದಾಳೆ; ಆಕೆಯು ತನ್ನ ಏಳು ಕಂಬ ಗಳನ್ನು ಕೆತ್ತಿಸಿದ್ದಾಳೆ.
9:2b.PRO.009.002 ಆಕೆಯು ತನ್ನ ಪಶುಗಳನ್ನು ವಧಿಸಿ, ತನ್ನ ದ್ರಾಕ್ಷಾರಸವನ್ನು ಬೆರಸಿ, ತನ್ನ ಮೇಜನ್ನು ಸಹ ಸಿದ್ಧಪಡಿಸಿದಳು.
9:3b.PRO.009.003 ಆಕೆಯು ತನ್ನ ಕನ್ನಿಕೆಯರನ್ನು ಕಳುಹಿಸುತ್ತಾಳೆ. ಆಕೆಯು ಪಟ್ಟಣದ ಅತಿ ಉನ್ನತ ಸ್ಥಳಗಳಲ್ಲಿ--
9:4b.PRO.009.004 ಮೂರ್ಖನು ಯಾವನೋ ಅವನು ಇಲ್ಲಿಗೆ ತಿರುಗಲಿ ಎಂದು ಕೂಗುತ್ತಾಳೆ. ತಿಳುವಳಿಕೆ ಇಲ್ಲದೆ ಇರುವವನಿಗೆ ಆಕೆಯು--
9:5b.PRO.009.005 ಬಾ, ನನ್ನ ರೊಟ್ಟಿಯನ್ನು ತಿಂದು ನಾನು ಬೆರಸಿದ ದ್ರಾಕ್ಷಾ ರಸವನ್ನು ಕುಡಿ ಎಂದೂ
9:6b.PRO.009.006 ಮೂಢರನ್ನು ಬಿಟ್ಟು ಬಾಳು ಮತ್ತು ವಿವೇಕದ ಮಾರ್ಗದಲ್ಲಿ ಹೋಗು ಎಂದೂ ಕೂಗುತ್ತಾಳೆ.
9:7b.PRO.009.007 ಪರಿಹಾಸ್ಯಮಾಡುವವನನ್ನು ಗದರಿಸುವವನು ತನಗೆ ತಾನೇ ಅವಮಾನಕ್ಕೆ ಗುರಿಮಾಡಿಕೊಳ್ಳುವನು; ದುಷ್ಟನನ್ನು ಗದರಿಸುವವನು ತನಗೆ ತಾನೇ ಕಳಂಕವನ್ನು ತಂದುಕೊಳ್ಳುವನು.
9:8b.PRO.009.008 ಪರಿಹಾಸ್ಯಮಾಡುವವನು ನಿನ್ನನ್ನು ಹಗೆಮಾಡದಂತೆ ಅವನನ್ನು ಗದರಿಸಬೇಡ. ಜ್ಞಾನಿಯನ್ನು ಗದರಿಸಿದರೆ ಅವನು ನಿನ್ನನ್ನು ಪ್ರೀತಿ ಮಾಡುವನು.
9:9b.PRO.009.009 ಜ್ಞಾನಿಗೆ ಶಿಕ್ಷಣ ಮಾಡಿದರೆ ಅವನು ಇನ್ನೂ ಹೆಚ್ಚಾಗಿ ಜ್ಞಾನವಂತನಾಗಿರುವನು; ನೀತಿವಂತ ನಿಗೆ ಬೋಧಿಸಿದರೆ ಅವನು ಜ್ಞಾನವನ್ನು ಹೆಚ್ಚಿಸಿ ಕೊಳ್ಳುವನು. ಕರ್ತನ ಭಯವೇ ಜ್ಞಾನಕ್ಕೆ ಮೂಲವು.
9:10b.PRO.009.010 ಪರಿಶುದ್ಧರ ತಿಳುವಳಿಕೆಯೇ ವಿವೇಕವು.
9:11b.PRO.009.011 ನನ್ನ ಮೂಲಕ ನಿನ್ನ ದಿನಗಳು ಹೆಚ್ಚುವವು; ನಿನ್ನ ಜೀವನದ ವರುಷಗಳು ವೃದ್ಧಿಯಾಗುವವು.
9:12b.PRO.009.012 ನೀನು ಜ್ಞಾನಿಯಾ ಗಿದ್ದರೆ ನಿನ್ನಷ್ಟಕ್ಕೆ ನೀನೇ ಜ್ಞಾನಿಯಾಗಿರುವಿ; ನೀನು ನಿಂದಿಸುವವನಾದರೆ ನೀನೇ ಅದನ್ನು ಅನುಭವಿಸುವಿ.
9:13b.PRO.009.013 ಬುದ್ಧಿಹೀನಳಾದ ಸ್ತ್ರೀಯು ಕೂಗಾಟದವಳು. ಅವಳು ಅಜ್ಞಾನಿ; ಏನೂ ತಿಳಿಯದವಳು.
9:14b.PRO.009.014 ತನ್ನ ಮನೆಯ ಬಾಗಲಿನಲ್ಲಿ ಪಟ್ಟಣದ ಎತ್ತರವಾದ ಸ್ಥಳಗಳ ಪೀಠದ ಮೇಲೆ ಕೂತುಕೊಂಡಿರುತ್ತಾಳೆ.
9:15b.PRO.009.015 ಮಾರ್ಗಕ್ಕನುಸಾರವಾಗಿ ಹೋಗುವ ಪ್ರಯಾಣಿಕ ರನ್ನು ಕರೆಯುತ್ತಾಳೆ.
9:16b.PRO.009.016 ಯಾವನು ಮೂಢನೋ ಅವನು ಇಲ್ಲಿಗೆ ತಿರುಗಲಿ; ವಿವೇಕವಿಲ್ಲದವನಿಗೆ ಆಕೆಯು--
9:17b.PRO.009.017 ಕದಿಯಲ್ಪಟ್ಟ ನೀರುಗಳು ಸಿಹಿಯಾಗಿವೆ ರಹಸ್ಯ ದಲ್ಲಿ ತಿನ್ನುವ ರೊಟ್ಟಿಯು ರುಚಿಯಾಗಿದೆ ಎಂದು ಹೇಳುತ್ತಾಳೆ.ಆದರೆ ಸತ್ತವರು ಅಲ್ಲಿದ್ದಾರೆಂದೂ ಪಾತಾಳದ ಅಗಾಧಗಳಲ್ಲಿ ಅವಳ ಅಥಿತಿಗಳು ಇದ್ದಾ ರೆಂದೂ ಅವನಿಗೆ ತಿಳಿಯದು.
9:18b.PRO.009.018 ಆದರೆ ಸತ್ತವರು ಅಲ್ಲಿದ್ದಾರೆಂದೂ ಪಾತಾಳದ ಅಗಾಧಗಳಲ್ಲಿ ಅವಳ ಅಥಿತಿಗಳು ಇದ್ದಾ ರೆಂದೂ ಅವನಿಗೆ ತಿಳಿಯದು.
10
10:1b.PRO.010.001 ಜ್ಞಾನಿಯಾದ ಮಗನು ತಂದೆಗೆ ಸಂತೋಷವನ್ನುಂಟು ಮಾಡುತ್ತಾನೆ; ಆಜ್ಞಾನಿ ಯಾದ ಮಗನಾದರೋ ತನ್ನ ತಾಯಿಗೆ ಭಾರವಾಗಿ ದ್ದಾನೆ.
10:2b.PRO.010.002 ಕೆಟ್ಟತನದ ಸಂಪತ್ತುಗಳು ಪ್ರಯೋಜನವಿಲ್ಲ; ನೀತಿಯು ಮರಣದಿಂದ ಬಿಡಿಸುತ್ತದೆ.
10:3b.PRO.010.003 ನೀತಿವಂತನ ಪ್ರಾಣವನ್ನು ಕರ್ತನು ಹಸಿವೆಗೊಳಿಸನು; ದುಷ್ಟರ ಆಸ್ತಿಯನ್ನು ಆತನು ತಳ್ಳಿಹಾಕುತ್ತಾನೆ.
10:4b.PRO.010.004 ಬಿಗಿ ಇಲ್ಲದ ಕೈಯಿಂದ ವ್ಯಾಪಾರ ಮಾಡುವವನು ದರಿದ್ರನಾಗು ವನು; ಆದರೆ ಚುರುಕಾದ ಕೈ ಐಶ್ವರ್ಯವನ್ನುಂಟು ಮಾಡುತ್ತದೆ.
10:5b.PRO.010.005 ಬೇಸಿಗೆಯಲ್ಲಿ ಕೂಡಿಸುವವನು ಬುದ್ಧಿ ವಂತನಾದ ಮಗನು ಸುಗ್ಗಿಯಲ್ಲಿ ನಿದ್ರೆಮಾಡುವವನು ನಾಚಿಕೆಪಡಿಸುವ ಮಗನು.
10:6b.PRO.010.006 ನೀತಿವಂತರ ತಲೆಯ ಮೇಲೆ ಆಶೀರ್ವಾದಗಳು ಇವೆ; ಆದರೆ ದುಷ್ಟನ ಬಾಯಿಯನ್ನು ಬಲಾತ್ಕಾರವು ಮುಚ್ಚುತ್ತದೆ.
10:7b.PRO.010.007 ನೀತಿ ವಂತರ ಸ್ಮರಣೆಯು ಧನ್ಯಕರವಾಗಿದೆ; ದುಷ್ಟರ ಹೆಸರು ಕೊಳೆಯುತ್ತದೆ.
10:8b.PRO.010.008 ಜ್ಞಾನ ಹೃದಯದವರು ಆಜ್ಞೆಗಳನ್ನು ಸ್ವೀಕರಿಸುವರು. ಹರಟೆಯ ಮೂರ್ಖನು ಬೀಳುವನು.
10:9b.PRO.010.009 ಯಥಾರ್ಥವಾಗಿ ನಡೆಯುತ್ತಿರುವವನು ದೃಢವಾಗಿ ನಡೆಯುತ್ತಾನೆ; ತನ್ನ ಮಾರ್ಗಗಳನ್ನು ಡೊಂಕು ಮಾಡು ತ್ತಿರುವವನು ಬಯಲಿಗೆ ಬರುವನು.
10:10b.PRO.010.010 ಕಣ್ಣು ಮಿಟಕಿ ಸುವವನು ದುಃಖವನ್ನುಂಟುಮಾಡುತ್ತಾನೆ; ಹರಟೆಯ ಮೂರ್ಖನು ಬೀಳುವನು.
10:11b.PRO.010.011 ನೀತಿವಂತನ ಬಾಯಿ ಯು ಜೀವಕರವಾದ ಬಾವಿ; ದುಷ್ಟನ ಬಾಯನ್ನು ಬಲಾತ್ಕಾರವು ಮುಚ್ಚುತ್ತದೆ.
10:12b.PRO.010.012 ದ್ವೇಷವು ಜಗಳಗಳನ್ನು ಎಬ್ಬಿಸುತ್ತದೆ; ಪ್ರೀತಿಯು ಎಲ್ಲಾ ಪಾಪಗಳನ್ನು ಮುಚ್ಚು ತ್ತದೆ.
10:13b.PRO.010.013 ವಿವೇಕವುಳ್ಳ ತುಟಿಗಳಲ್ಲಿ ಜ್ಞಾನವು ಸಿಕ್ಕು ತ್ತದೆ; ವಿವೇಕವಿಲ್ಲದವನ ಬೆನ್ನಿಗೆ ಬೆತ್ತವೇ ಸರಿ.
10:14b.PRO.010.014 ಜ್ಞಾನಿ ಗಳು ತಿಳುವಳಿಕೆಯನ್ನು ಇಟ್ಟುಕೊಳ್ಳುತ್ತಾರೆ; ಆದರೆ ಮೂರ್ಖನ ಬಾಯಿ ನಾಶನಕ್ಕೆ ಸವಿಾಪವಾಗಿದೆ.
10:15b.PRO.010.015 ಐಶ್ವರ್ಯವಂತನ ಸಂಪತ್ತು ಅವನ ಬಲವಾದ ಪಟ್ಟಣ; ಬಡವರ ನಾಶನವು ಅವರ ಬಡತನವೇ.
10:16b.PRO.010.016 ನೀತಿವಂತರ ಪ್ರಯಾಸವು ಜೀವಕ್ಕಾಗಿಯೂ ದುಷ್ಟರ ಫಲವು ಪಾಪಕ್ಕಾಗಿಯೂ ಇವೆ.
10:17b.PRO.010.017 ಶಿಕ್ಷಣವನ್ನು ಕೈಕೊಳ್ಳುವವನು ಜೀವನದ ಮಾರ್ಗದಲ್ಲಿ ಇದ್ದಾನೆ; ಗದರಿಕೆಯನ್ನು ತಿರಸ್ಕರಿಸುವವನು ತಪ್ಪುಮಾಡುತ್ತಾನೆ.
10:18b.PRO.010.018 ಸುಳ್ಳಾಡುವ ತುಟಿಗಳಿಂದ ಹಗೆಯನ್ನಿಟ್ಟುಕೊಂಡ ವನೂ ಚಾಡಿಹೇಳುವವನೂ ಮೂರ್ಖನು.
10:19b.PRO.010.019 ಹೆಚ್ಚು ಮಾತುಗಳಿಂದ ಪಾಪಕ್ಕೆ ಕೊರತೆ ಇರುವದಿಲ್ಲ. ತನ್ನ ತುಟಿಗಳನ್ನು ತಡೆಯುವವನು ಜ್ಞಾನವಂತನು.
10:20b.PRO.010.020 ನೀತಿ ವಂತರ ನಾಲಿಗೆಯು ಚೊಕ್ಕ ಬೆಳ್ಳಿಯಂತಿದೆ; ದುಷ್ಟರ ಹೃದಯವು ಅಲ್ಪವಾದದ್ದು.
10:21b.PRO.010.021 ನೀತಿವಂತರ ತುಟಿಗಳು ಅನೇಕರನ್ನು ಪೋಷಿಸುತ್ತವೆ. ಜ್ಞಾನದ ಕೊರತೆಯಿಂದ ಅವಿವೇಕಿಗಳು ಸಾಯುತ್ತಾರೆ.
10:22b.PRO.010.022 ಕರ್ತನ ಆರ್ಶೀ ವಾದವು ಐಶ್ವರ್ಯವನ್ನುಂಟು ಮಾಡುವದು. ಅದ ರೊಂದಿಗೆ ಆತನು ಯಾವ ದುಃಖವನ್ನೂ ಸೇರಿಸುವ ದಿಲ್ಲ.
10:23b.PRO.010.023 ಬುದ್ಧಿಹೀನನಿಗೆ ಕೇಡು ಮಾಡುವದು ಹಾಸ್ಯಾ ಸ್ಪದವಾಗಿದೆ; ಆದರೆ ಗ್ರಹಿಸುವವನಿಗೆ ಜ್ಞಾನವಿದೆ.
10:24b.PRO.010.024 ದುಷ್ಟನ ಭಯವು ಅವನ ಮೇಲೆ ಬರುವದು; ನೀತಿವಂತರ ಇಷ್ಟವು ಸಫಲವಾಗುವದು.
10:25b.PRO.010.025 ಹೇಗೆ ಬಿರುಗಾಳಿಯು ಬೀಸುವದೋ ಹಾಗೆಯೇ ದುಷ್ಟರು ಇಲ್ಲವಾಗುವರು. ನೀತಿವಂತನು ಶಾಶ್ವತವಾದ ಅಸ್ತಿವಾರ ವಾಗಿದ್ದಾನೆ.
10:26b.PRO.010.026 ಹಲ್ಲುಗಳಿಗೆ ಹುಳಿಯೂ ಕಣ್ಣುಗಳಿಗೆ ಹೊಗೆಯೂ ಹೇಗೋ ಹಾಗೆಯೇ ತನ್ನನ್ನು ಕಳುಹಿಸು ವವರಿಗೆ ಸೋಮಾರಿಯೂ ಇರುವನು.
10:27b.PRO.010.027 ಕರ್ತನ ಭಯವು ದಿನಗಳನ್ನು ಹೆಚ್ಚಿಸುತ್ತದೆ; ದುಷ್ಟರ ವರುಷ ಗಳು ಕಡಿಮೆ ಮಾಡಲ್ಪಡುವವು.
10:28b.PRO.010.028 ನೀತಿವಂತರ ನಿರೀ ಕ್ಷೆಯು ಆನಂದಕರವಾಗಿರುವದು; ಆದರೆ ದುಷ್ಟರ ನಿರೀಕ್ಷೆಯು ನಾಶವಾಗುವದು.
10:29b.PRO.010.029 ಯಥಾರ್ಥವಂತರಿಗೆ ಕರ್ತನ ಮಾರ್ಗವು ಬಲವಾಗಿದೆ; ಅಕ್ರಮ ಮಾಡುವ ವರಿಗೆ ಅದು ನಾಶನವಾಗಿರುವದು.
10:30b.PRO.010.030 ನೀತಿವಂತರು ಎಂದಿಗೂ ಕದಲುವದೇ ಇಲ್ಲ; ದುಷ್ಟರು ಭೂಮಿಯಲ್ಲಿ ವಾಸಮಾಡುವದಿಲ್ಲ.
10:31b.PRO.010.031 ನೀತಿವಂತರ ಬಾಯಿಯು ಜ್ಞಾನವನ್ನು ಫಲಿಸುತ್ತದೆ; ಮೂರ್ಖನ ನಾಲಿಗೆಯು ಕತ್ತರಿಸಲ್ಪಡುವದು.ಯಾವದು ಅಂಗೀಕರಿಸ ತಕ್ಕದ್ದೋ ಅದು ನೀತಿವಂತರ ತುಟಿಗಳಿಗೆ ತಿಳಿಯು ವದು; ದುಷ್ಟರ ಬಾಯಿಯು ಮೂರ್ಖತನವನ್ನು ಹೊರಗೆಡುವುತ್ತದೆ.
10:32b.PRO.010.032 ಯಾವದು ಅಂಗೀಕರಿಸ ತಕ್ಕದ್ದೋ ಅದು ನೀತಿವಂತರ ತುಟಿಗಳಿಗೆ ತಿಳಿಯು ವದು; ದುಷ್ಟರ ಬಾಯಿಯು ಮೂರ್ಖತನವನ್ನು ಹೊರಗೆಡುವುತ್ತದೆ.
11
11:1b.PRO.011.001 ಮೋಸದ ತಕ್ಕಡಿ ಕರ್ತನಿಗೆ ಅಸಹ್ಯವಾಗಿದೆ; ನ್ಯಾಯದ ತೂಕ ಆತನ ಆನಂದವು.
11:2b.PRO.011.002 ಗರ್ವ ಬಂದಾಗ ನಾಚಿಕೆಯೂ ಬರುತ್ತದೆ; ದೀನರಲ್ಲಿ ಜ್ಞಾನವಿದೆ.
11:3b.PRO.011.003 ಯಥಾರ್ಥವಂತರ ಪ್ರಾಮಾಣಿಕತೆ ಅವರನ್ನು ನಡಿಸುವದು; ಅಪರಾಧದ ಮೂರ್ಖತನವು ಅವರನ್ನು ನಾಶಪಡಿಸುವದು.
11:4b.PRO.011.004 ಉಗ್ರತೆಯ ದಿನದಲ್ಲಿ ಐಶ್ವರ್ಯವು ಲಾಭಕರವಾಗುವದಿಲ್ಲ; ನೀತಿಯು ಮರಣ ದಿಂದ ಬಿಡಿಸುತ್ತದೆ.
11:5b.PRO.011.005 ಸಂಪೂರ್ಣನ ನೀತಿಯು ಅವನ ಮಾರ್ಗವನ್ನು ಸರಾಗಮಾಡುವದು; ದುಷ್ಟನು ತನ್ನ ದುಷ್ಟತ್ವದಿಂದಲೇ ಬೀಳುವನು.
11:6b.PRO.011.006 ಯಥಾರ್ಥವಂತರ ನೀತಿಯು ಅವರನ್ನು ಬಿಡಿಸುವದು; ತಮ್ಮ ಸ್ವಂತ ತುಂಟ ತನದಲ್ಲಿ ದೋಷಿಗಳು ಸಿಕ್ಕಿಬೀಳುವರು.
11:7b.PRO.011.007 ದುಷ್ಟನು ಸಾಯುವಾಗ ಅವನ ನಿರೀಕ್ಷೆಗಳು ಹಾಳಾಗುವವು; ಅನೀತಿವಂತನ ನಿರೀಕ್ಷೆಯು ನಾಶವಾಗುವದು.
11:8b.PRO.011.008 ನೀತಿವಂತನು ಇಕ್ಕಟ್ಟಿನಿಂದ ತಪ್ಪಿಸಿಕೊಳ್ಳುತ್ತಾನೆ; ಅವನ ಸ್ಥಳದಲ್ಲಿ ದುಷ್ಟನು ಬರುತ್ತಾನೆ.
11:9b.PRO.011.009 ಒಬ್ಬ ಕಪಟಿಯು ಬಾಯಿಂದ ತನ್ನ ನೆರೆಯವನನ್ನು ಹಾಳುಮಾಡುತ್ತಾನೆ; ತಿಳುವಳಿಕೆಯ ಮೂಲಕ ನೀತಿವಂತನು ಬಿಡಿಸಲ್ಪ ಡುವನು.
11:10b.PRO.011.010 ನೀತಿವಂತರು ಚೆನ್ನಾಗಿದ್ದರೆ ಪಟ್ಟಣವು ಉಲ್ಲಾಸಿಸುತ್ತದೆ; ದುಷ್ಟರು ನಾಶವಾದರೆ ಆರ್ಭಟವಿರು ತ್ತದೆ.
11:11b.PRO.011.011 ಯಥಾರ್ಥವಂತರ ಆಶೀರ್ವಾದದಿಂದ ಪಟ್ಟ ಣವು ಹೆಚ್ಚಿಸಲ್ಪಡುತ್ತದೆ. ದುಷ್ಟರ ಬಾಯಿಂದ ಅದು ಕೆಡವಲ್ಪಡುತ್ತದೆ.
11:12b.PRO.011.012 ಜ್ಞಾನವಿಲ್ಲದವನು ತನ್ನ ನೆರೆಯ ವನನ್ನು ಹೀನೈಸುತ್ತಾನೆ; ವಿವೇಕಿಯು ಮೌನವಾಗಿರು ತ್ತಾನೆ.
11:13b.PRO.011.013 ಚಾಡಿಕೋರನು ರಹಸ್ಯಗಳನ್ನು ಬಹಿರಂಗ ಪಡಿಸುತ್ತಾನೆ. ನಂಬಿಕೆಯ ಆತ್ಮವುಳ್ಳವನು ಸಂಗತಿಯನ್ನು ಮುಚ್ಚುತ್ತಾನೆ.
11:14b.PRO.011.014 ಆಲೋಚನೆ ಇಲ್ಲದಿರುವಲ್ಲಿ ಜನರು ಬೀಳುತ್ತಾರೆ; ಸಲಹೆಗಾರರ ಸಮೂಹದಲ್ಲಿ ಭದ್ರತೆ ಇದೆ.
11:15b.PRO.011.015 ಅನ್ಯನಿಗೆ ಹೊಣೆಯಾಗುವವನು ಹಾನಿಗೆ ಗುರಿಯಾಗುತ್ತಾನೆ; ಹೊಣೆಗಾರತ್ವವನ್ನು ಹಗೆಮಾಡಿ ಕೊಳ್ಳುವವನು ಭದ್ರವಾಗಿರುವನು.
11:16b.PRO.011.016 ಕೃಪೆಯುಳ್ಳ ಸ್ತ್ರೀಯು ತನ್ನ ಗೌರವವನ್ನು ಕಾಪಾಡಿಕೊಳ್ಳುತ್ತಾಳೆ. ಬಲಿಷ್ಠರು ಐಶ್ವರ್ಯವನ್ನು ಕಾಪಾಡಿಕೊಳ್ಳುತ್ತಾರೆ.
11:17b.PRO.011.017 ಕರುಣೆಯುಳ್ಳವನು ತನ್ನ ಪ್ರಾಣಕ್ಕೆ ಒಳ್ಳೇದನ್ನು ಮಾಡಿಕೊಳ್ಳುತ್ತಾನೆ; ಕಠೋರಿಯು ತನ್ನ ಶರೀರವನ್ನು ಬಾಧಿಸಿಕೊಳ್ಳುತ್ತಾನೆ.
11:18b.PRO.011.018 ದುಷ್ಟನು ಮೋಸದ ಕೃತ್ಯವನ್ನು ಮಾಡುತ್ತಾನೆ; ನೀತಿಯನ್ನು ಬಿತ್ತುವವನಿಗೆ ನಿಸ್ಸಂದೇಹ ವಾಗಿ ಬಹುಮಾನವಿರುವದು.
11:19b.PRO.011.019 ನೀತಿಯು ಜೀವಕ್ಕೆ ಒಲಿಯುತ್ತದೆ; ಕೆಟ್ಟದ್ದನ್ನು ಹಿಂದಟ್ಟುವವನು ತನ್ನ ಮರ ಣಕ್ಕೆ ಹಿಂದಟ್ಟುತ್ತಾನೆ.
11:20b.PRO.011.020 ಮೂರ್ಖ ಹೃದಯವುಳ್ಳವರು ಕರ್ತನಿಗೆ ಅಸಹ್ಯವಾದವರು; ತಮ್ಮ ಮಾರ್ಗದಲ್ಲಿ ಯಥಾರ್ಥವಾಗಿ ಇರುವವರು ಆತನ ಆನಂದವಾಗಿ ದ್ದಾರೆ.
11:21b.PRO.011.021 ಕೈಗೆ ಕೈ ಕೊಟ್ಟರೂ ದುಷ್ಟನು ಶಿಕ್ಷಿಸಲ್ಪಡದೆ ಇರುವದಿಲ್ಲ; ನೀತಿವಂತರ ವಂಶವು ತಪ್ಪಿಸಿಕೊಳ್ಳುವದು.
11:22b.PRO.011.022 ಹಂದಿಯ ಮೂಗಿನಲ್ಲಿರುವ ಬಂಗಾರದ ಒಡವೆಯು ಹೇಗೋ ಹಾಗೆಯೇ ವಿವೇಕವಿಲ್ಲದ ಸುಂದರವಾದ ಸ್ತ್ರೀಯು ಇರುವಳು.
11:23b.PRO.011.023 ನೀತಿವಂತರು ಒಳ್ಳೇಯದನ್ನು ಮಾತ್ರ ಅಪೇಕ್ಷಿಸುತ್ತಾರೆ; ದುಷ್ಟರ ಅಪೇಕ್ಷೆಯು ಕೋಪ ವಾಗಿದೆ.
11:24b.PRO.011.024 ಚದುರಿಸಿದಾಗ್ಯೂ ವೃದ್ಧಿಯಾಗುತ್ತದೆ; ಬೇಕಾದದ್ದಕ್ಕಿಂತ ಹೆಚ್ಚಿನದನ್ನು ಬಿಗಿಹಿಡಿಯುವಂಥದ್ದು ಬಡತನಕ್ಕೆ ನಡಿಸುತ್ತದೆ.
11:25b.PRO.011.025 ಉದಾರಿಯು ಪುಷ್ಠನಾಗು ವನು; ನೀರು ಹಾಯಿಸುವವನಿಗೆ ನೀರು ದೊರೆಯು ವದು.
11:26b.PRO.011.026 ಧಾನ್ಯವನ್ನು ಬಿಗಿಹಿಡಿಯುವವನನ್ನು ಜನರು ಶಪಿಸುವರು; ಅದನ್ನು ಮಾರುವವನ ತಲೆಯ ಮೇಲೆ ಆಶೀರ್ವಾದವು ನೆಲೆಯಾಗಿರುವದು.
11:27b.PRO.011.027 ಒಳ್ಳೇದನ್ನು ಸೂಕ್ಷ್ಮವಾಗಿ ಹುಡುಕುವವನು ದಯೆಯನ್ನು ಹೊಂದು ತ್ತಾನೆ; ಆದರೆ ಕೇಡನ್ನು ಹುಡುಕುವವನಿಗೆ ಕೇಡೇ ಆಗುವದು.
11:28b.PRO.011.028 ತನ್ನ ಐಶ್ವರ್ಯವನ್ನು ನಂಬಿದವನು ಬಿದ್ದುಹೋಗುವನು; ನೀತಿವಂತರು ಕೊಂಬೆಯ ಹಾಗೆ ಚಿಗುರುವರು.
11:29b.PRO.011.029 ತನ್ನ ಮನೆಯವರನ್ನು ಬಾಧಿಸುವವನು ಗಾಳಿಯನ್ನು ಬಾಧ್ಯವಾಗಿ ಹೊಂದುವನು; ಜ್ಞಾನವುಳ್ಳ ಹೃದಯದವನಿಗೆ ಅವಿವೇಕಿಯು ಸೇವಕನಾಗಿರುವನು.
11:30b.PRO.011.030 ನೀತಿವಂತರ ಫಲವು ಜೀವವೃಕ್ಷ; ಆತ್ಮಗಳನ್ನು ಗೆಲ್ಲು ವವನು ಜ್ಞಾನಿಯಾಗಿದ್ದಾನೆ.ಇಗೋ, ಭೂಮಿಯ ಮೇಲೆ ನೀತಿವಂತರು ಪ್ರತಿಫಲವನ್ನು ಹೊಂದುವರು; ದುಷ್ಟನೂ ಪಾಪಿಯೂ ಎಷ್ಟೋ ಹೆಚ್ಚಾಗಿ ಪ್ರತಿಫಲ ವನ್ನು ಹೊಂದುತ್ತಾರೆ.
11:31b.PRO.011.031 ಇಗೋ, ಭೂಮಿಯ ಮೇಲೆ ನೀತಿವಂತರು ಪ್ರತಿಫಲವನ್ನು ಹೊಂದುವರು; ದುಷ್ಟನೂ ಪಾಪಿಯೂ ಎಷ್ಟೋ ಹೆಚ್ಚಾಗಿ ಪ್ರತಿಫಲ ವನ್ನು ಹೊಂದುತ್ತಾರೆ.
12
12:1b.PRO.012.001 ಶಿಕ್ಷಣವನ್ನು ಪ್ರೀತಿಸುವವನು ತಿಳುವಳಿಕೆಯನ್ನು ಪ್ರೀತಿಸುವವನಾಗಿದ್ದಾನೆ; ಗದರಿಕೆ ಯನ್ನು ಹಗೆಮಾಡುವವನು ಪಶುಪ್ರಾಯನು.
12:2b.PRO.012.002 ಒಳ್ಳೆ ಯವನು ಕರ್ತನ ದಯೆಯನ್ನು ಹೊಂದುತ್ತಾನೆ; ಕುಯುಕ್ತಿ ಮಾಡುವವನನ್ನು ಆತನು ದುಷ್ಟನೆಂದು ಖಂಡಿಸುತ್ತಾನೆ.
12:3b.PRO.012.003 ಯಾವನೂ ದುಷ್ಟತನದಿಂದ ಸ್ಥಿರವಾಗುವದಿಲ್ಲ; ನೀತಿವಂತರ ಬೇರು ಕದಲುವದಿಲ್ಲ.
12:4b.PRO.012.004 ಗುಣವತಿಯಾದ ಸ್ತ್ರೀಯು ತನ್ನ ಪತಿಗೆ ಕಿರೀಟ; ನಾಚಿಕೆಪಡಿಸುವವಳು ಅವನ ಎಲುಬುಗಳಿಗೆ ಕೊಳೆ ಯುವಿಕೆಯಂತೆ ಇರುವಳು.
12:5b.PRO.012.005 ನೀತಿವಂತರ ಆಲೋ ಚನೆಗಳು ನ್ಯಾಯವಾಗಿವೆ; ದುಷ್ಟರ ಆಲೋಚನೆಗಳು ಮೋಸ.
12:6b.PRO.012.006 ದುಷ್ಟರ ಮಾತುಗಳು ರಕ್ತಕ್ಕಾಗಿ ಹೊಂಚು ಹಾಕುತ್ತವೆ; ಯಥಾರ್ಥವಂತರ ಬಾಯಿಯು ಅವರನ್ನು ಬಿಡಿಸುವದು.
12:7b.PRO.012.007 ದುಷ್ಟರು ಕೆಡವಲ್ಪಟ್ಟು ಇಲ್ಲದೇ ಹೋಗುವರು; ನೀತಿವಂತರ ಮನೆಯು ನಿಲ್ಲುವದು.
12:8b.PRO.012.008 ತನ್ನ ಜ್ಞಾನಕ್ಕನುಸಾರವಾಗಿ ಒಬ್ಬ ಮನುಷ್ಯನು ಹೊಗ ಳಲ್ಪಡುವನು; ವಕ್ರಹೃದಯವುಳ್ಳವನು ತಿರಸ್ಕರಿಸಲ್ಪಡು ವನು.
12:9b.PRO.012.009 ರೊಟ್ಟಿಯ ಕೊರತೆ ಇದ್ದು ತನ್ನನ್ನು ತಾನೇ ಘನಪಡಿಸಿಕೊಳ್ಳುವವನಿಗಿಂತಲೂ ಸೇವಕನುಳ್ಳವನಾಗಿ ತಿರಸ್ಕರಿಸಲ್ಪಡುವವನೇ ಲೇಸು.
12:10b.PRO.012.010 ನೀತಿವಂತನು ತನ್ನ ಪಶುವಿನ ಪ್ರಾಣವನ್ನು ರಕ್ಷಿಸುತ್ತಾನೆ. ಆದರೆ ದುಷ್ಟರ ಅಂತಃಕರುಣೆಯು ಕ್ರೂರತನವೇ.
12:11b.PRO.012.011 ತನ್ನ ಹೊಲವನ್ನು ವ್ಯವಸಾಯ ಮಾಡುವವನು ರೊಟ್ಟಿಯಿಂದ ತೃಪ್ತಿ ಹೊಂದುವನು; ನಿಷ್ಪ್ರಯೋಜಕರನ್ನು ಹಿಂಬಾಲಿಸುವ ವನು ವಿವೇಕ ಶೂನ್ಯನು.
12:12b.PRO.012.012 ದುಷ್ಟರು ಕೆಟ್ಟವರ ಬಲೆಯನ್ನು ಅಪೇಕ್ಷಿಸುತ್ತಾರೆ; ನೀತಿವಂತರ ಬೇರು ಫಲವನ್ನು ಕೊಡುತ್ತದೆ.
12:13b.PRO.012.013 ತನ್ನ ತುಟಿಗಳ ದೋಷದಿಂದ ದುಷ್ಟನು ಉರ್ಲಿಗೆ ಬೀಳುವನು; ನೀತಿವಂತರು ಇಕ್ಕಟ್ಟಿ ನೊಳಗಿಂದ ತಪ್ಪಿಸಿಕೊಳ್ಳುವರು.
12:14b.PRO.012.014 ತನ್ನ ಬಾಯಿಯ ಫಲದ ಮುಖಾಂತರ ಒಬ್ಬ ಮನುಷ್ಯನು ಒಳ್ಳೆಯದ ರಿಂದ ತೃಪ್ತನಾಗುವನು; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು.
12:15b.PRO.012.015 ಅವಿವೇಕಿಯ ಮಾರ್ಗ ವು ತನ್ನ ಕಣ್ಣುಗಳಿಗೆ ನೆಟ್ಟಗಾಗಿದೆ; ಆಲೋಚನೆಗೆ ಕಿವಿಗೊಡುವವನು ಜ್ಞಾನಿಯಾಗಿದ್ದಾನೆ.
12:16b.PRO.012.016 ಅವಿವೇ ಕಿಯ ಕೋಪವು ತಟ್ಟನೆ ರಟ್ಟಾಗುವದು; ಜಾಣನು ಅವಮಾನವನ್ನು ಮರೆಮಾಡುತ್ತಾನೆ.
12:17b.PRO.012.017 ಸತ್ಯವನ್ನಾ ಡುವವನು ನ್ಯಾಯವನ್ನೂ ಸುಳ್ಳುಸಾಕ್ಷಿಯು ಮೋಸ ವನ್ನೂ ತೋರ್ಪಡಿಸುತ್ತಾನೆ.
12:18b.PRO.012.018 ಕತ್ತಿಯ ಇರಿತದ ಹಾಗೆ ಮಾತನಾಡುವದು ಉಂಟು. ಜ್ಞಾನವಂತರ ನಾಲಿಗೆಯು ಆರೋಗ್ಯ.
12:19b.PRO.012.019 ಸತ್ಯದ ತುಟಿಯು ಸದಾ ಸ್ಥಿರಗೊಳ್ಳು ವದು; ಸುಳ್ಳಾಡುವ ನಾಲಿಗೆಯು ಕ್ಷಣಿಕ.
12:20b.PRO.012.020 ಕೇಡನ್ನು ಕಲ್ಪಿಸುವವರ ಹೃದಯದಲ್ಲಿ ಮೋಸ; ಸಮಾಧಾನದ ಆಲೋಚನೆಯನ್ನು ಹೇಳುವವರಿಗೆ ಸಂತೋಷ.
12:21b.PRO.012.021 ನೀತಿವಂತನಿಗೆ ಯಾವ ಕೇಡೂ ಸಂಭವಿಸದು; ದುಷ್ಟರಾದರೋ ಕೇಡಿನಿಂದ ತುಂಬಿಕೊಳ್ಳುವರು.
12:22b.PRO.012.022 ಸುಳ್ಳಾ ಡುವ ತುಟಿಗಳು ಕರ್ತನಿಗೆ ಅಸಹ್ಯವಾಗಿವೆ. ಸತ್ಯದಿಂದ ನಡೆದುಕೊಳ್ಳುವವರು ಆತನ ಆನಂದವಾಗಿದ್ದಾರೆ.
12:23b.PRO.012.023 ಜಾಣನು ತಿಳಿದದ್ದನ್ನು ಗುಪ್ತಪಡಿಸುತ್ತಾನೆ. ಅವಿವೇಕಿ ಗಳ ಹೃದಯವು ಅವಿವೇಕತ್ವವನ್ನು ಪ್ರಕಟಿಸುತ್ತದೆ.
12:24b.PRO.012.024 ಚುರುಕು ಕೈಯುಳ್ಳವನು ಆಳುವನು, ಸೋಮಾರಿ ಗಳು ಕಪ್ಪಕೊಡುವವರಾಗುವರು.
12:25b.PRO.012.025 ಮನುಷ್ಯನ ಹೃದ ಯದಲ್ಲಿರುವ ಭಾರವು ಅದನ್ನು ಕುಗ್ಗಿಸುವದು; ಒಳ್ಳೆಯ ಮಾತು ಅದನ್ನು ಹಿಗ್ಗುವಂತೆ ಮಾಡುವದು.
12:26b.PRO.012.026 ನೀತಿ ವಂತನು ತನ್ನ ನೆರೆಯವನಿಗಿಂತ ಶ್ರೇಷ್ಠನಾಗಿದ್ದಾನೆ; ದುಷ್ಟರ ಮಾರ್ಗವು ಅವರನ್ನು ತಪ್ಪು ದಾರಿಗೆ ಎಳೆ ಯುತ್ತದೆ.
12:27b.PRO.012.027 ಸೋಮಾರಿಯು ಬೇಟೆಯಾಡಿದ್ದನ್ನು ಬೇಯಿಸುವದಿಲ್ಲ; ಆದರೆ ಶ್ರದ್ಧೆಯುಳ್ಳವನ ಆಸ್ತಿಯು ಅಮೂಲ್ಯವಾಗಿದೆ.ನೀತಿಯ ಮಾರ್ಗದಲ್ಲಿ ಜೀವ ವಿದೆ; ಅದರ ದಾರಿಯಲ್ಲಿ ಮರಣವೇ ಇಲ್ಲ.
12:28b.PRO.012.028 ನೀತಿಯ ಮಾರ್ಗದಲ್ಲಿ ಜೀವ ವಿದೆ; ಅದರ ದಾರಿಯಲ್ಲಿ ಮರಣವೇ ಇಲ್ಲ.
13
13:1b.PRO.013.001 ಜ್ಞಾನಿಯಾದ ಮಗನು ತನ್ನ ತಂದೆಯ ಬೋಧನೆಯನ್ನು ಕೇಳುತ್ತಾನೆ; ತಿರಸ್ಕರಿಸು ವವನು ಗದರಿಕೆಯನ್ನು ಕೇಳುವದಿಲ್ಲ.
13:2b.PRO.013.002 ತನ್ನ ಬಾಯಿಯ ಫಲದಿಂದ ಒಬ್ಬ ಮನುಷ್ಯನು ಶ್ರೇಷ್ಠವಾದದ್ದನ್ನು ತಿನ್ನು ವನು; ದೋಷಿಗಳ ಪ್ರಾಣವು ಬಲಾತ್ಕಾರವನ್ನು ತಿನ್ನು ವದು.
13:3b.PRO.013.003 ತನ್ನ ಬಾಯನ್ನು ಕಾಪಾಡುವವನು ಜೀವ ವನ್ನು ಕಾಯುತ್ತಾನೆ; ತನ್ನ ತುಟಿಗಳನ್ನು ಅಗಲವಾಗಿ ತೆರೆಯುವವನಿಗೆ ನಾಶನವಾಗುವದು.
13:4b.PRO.013.004 ಸೋಮಾ ರಿಯ ಪ್ರಾಣವು ಅಪೇಕ್ಷಿಸಿದರೂ ಏನೂ ಹೊಂದುವ ದಿಲ್ಲ; ಜಾಗ್ರತೆಯುಳ್ಳವನ ಪ್ರಾಣವು ಪುಷ್ಟಿಯಾಗು ವದು.
13:5b.PRO.013.005 ನೀತಿವಂತನು ಸುಳ್ಳನ್ನು ಹಗೆಮಾಡುತ್ತಾನೆ; ದುಷ್ಟನು ಹೇಸಿಗೆಯಾಗಿದ್ದು ಅವಮಾನಕ್ಕೆ ಗುರಿಯಾಗು ವನು.
13:6b.PRO.013.006 ಯಥಾರ್ಥವಂತನನ್ನು ನೀತಿಯು ತನ್ನ ಮಾರ್ಗ ದಲ್ಲಿ ಕಾಪಾಡುತ್ತದೆ; ಕೆಟ್ಟತನವು ಪಾಪಿಯನ್ನು ಕೆಡವುವದು.
13:7b.PRO.013.007 ತನ್ನನ್ನು ತಾನೇ ಐಶ್ವರ್ಯವಂತನಾಗಿ ಮಾಡಿಕೊಳ್ಳುವವನು ಇದ್ದಾನೆ; ಅವನಿಗೆ ಏನೂ ಇರು ವದಿಲ್ಲ. ತನ್ನನ್ನು ಬಡವನಾಗಿ ಮಾಡಿಕೊಳ್ಳುವವನಿ ದ್ದಾನೆ; ಅವನಿಗೆ ಎಷ್ಟೋ ಐಶ್ವರ್ಯವಿದೆ.
13:8b.PRO.013.008 ಒಬ್ಬನ ಪ್ರಾಣದ ವಿಮೋಚನೆಯು ಅವನ ಐಶ್ವರ್ಯವೇ; ಬಡವನು ಗದರಿಕೆಯನ್ನು ಕೇಳುವದಿಲ್ಲ.
13:9b.PRO.013.009 ನೀತಿವಂತರ ಬೆಳಕು ಸಂತೋಷಿಸುತ್ತದೆ; ದುಷ್ಟರ ದೀಪವು ಆರಿ ಹೋಗುವದು.
13:10b.PRO.013.010 ಗರ್ವದಿಂದ ಕಲಹ ಮಾತ್ರ ಬರುತ್ತದೆ; ಒಳ್ಳೆಯ ಸಲಹೆ ಹೊಂದಿದವರಿಗೆ ಜ್ಞಾನವಿದೆ.
13:11b.PRO.013.011 ವ್ಯರ್ಥತ್ವದಿಂದ ಹೊಂದಿದ ಐಶ್ವರ್ಯವು ಕಡಿಮೆ ಯಾಗುವದು; ಪ್ರಯಾಸದಿಂದ ಕೂಡಿಸುವವನು ವೃದ್ಧಿ ಗೊಳ್ಳುವನು.
13:12b.PRO.013.012 ತಡವಾದ ನಿರೀಕ್ಷೆ ಹೃದಯವನ್ನು ಅಸ್ವಸ್ಥತೆ ಮಾಡುತ್ತದೆ; ಆಶೆಯು ಸಫಲವಾದರೆ ಅದು ಜೀವಕರವಾದ ವೃಕ್ಷವು.
13:13b.PRO.013.013 ವಾಕ್ಯವನ್ನು ಉಲ್ಲಂಘಿಸುವ ವನು ನಾಶವಾಗುವನು; ಆಜ್ಞೆಗೆ ಭಯಪಡುವವನು ಪ್ರತಿಫಲ ಹೊಂದುವನು.
13:14b.PRO.013.014 ಮರಣದ ಪಾಶಗ ಳಿಂದ ತಪ್ಪಿಸಿಕೊಳ್ಳುವದಕ್ಕೆ ಜ್ಞಾನವಂತರ ಕಟ್ಟಳೆಯು ಜೀವದ ಬುಗ್ಗೆಯಾಗಿದೆ.
13:15b.PRO.013.015 ಸುವಿವೇಕವು ದಯಾ ಸ್ಪದವು; ದೋಷಕರ ಮಾರ್ಗವು ಕಠಿಣವಾಗಿದೆ.
13:16b.PRO.013.016 ಪ್ರತಿ ಜಾಣನು ತಿಳುವಳಿಕೆಯಿಂದ ವರ್ತಿಸುತ್ತಾನೆ; ಅವಿವೇಕಿಯು ತನ್ನ ಮೂಢತ್ವವನ್ನು ಹೊರಗೆಡವು ತ್ತಾನೆ.
13:17b.PRO.013.017 ದುಷ್ಟ ಸೇವಕನು ಕೇಡಿಗೆ ಬೀಳುತ್ತಾನೆ; ನಂಬಿಕೆಯಾದ ರಾಯಭಾರಿಯು ಆರೋಗ್ಯದಾಯಕ.
13:18b.PRO.013.018 ಬೋಧನೆಯನ್ನು ತಿರಸ್ಕರಿಸುವವನಿಗೆ ಬಡತನವೂ ಅವಮಾನವೂ ಬರುವವು.; ಗದರಿಕೆಯನ್ನು ಗಮನಿಸು ವವನು ಸನ್ಮಾನಹೊಂದುವನು.
13:19b.PRO.013.019 ಇಷ್ಟ ಸಿದ್ಧಿ ಪ್ರಾಣಕ್ಕೆ ಸಿಹಿಯಾಗಿದೆ; ಕೆಟ್ಟತನದಿಂದ ತೊಲಗುವದು ಅವಿವೇಕಿಗಳಿಗೆ ಅಸಹ್ಯವಾಗಿದೆ.
13:20b.PRO.013.020 ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗಿರುವನು. ಬುದ್ಧಿ ಹೀನರ ಜೊತೆಗಾರನು ನಾಶವಾಗುವನು.
13:21b.PRO.013.021 ದುಷ್ಟತ್ವವು ಪಾಪಿಗಳನ್ನು ಹಿಂದಟ್ಟುತ್ತದೆ; ನೀತಿ ವಂತರಿಗೆ ಒಳ್ಳೇದು ಪ್ರತಿಫಲವಾಗುವದು.
13:22b.PRO.013.022 ಒಳ್ಳೆಯವನು ಮೊಮ್ಮಕ್ಕಳಿಗೆ ಆಸ್ತಿಯನ್ನು ಬಿಡುವನು; ಪಾಪಿಯ ಸೊತ್ತು ನೀತಿ ವಂತರಿಗೆ ಇಡಲ್ಪಟ್ಟಿದೆ.
13:23b.PRO.013.023 ಬಡವರಿಗೆ ಭೂಮಿಯ ಸಾಗುವಳಿಯಲ್ಲಿ ಬಹಳ ಆಹಾರವು ಸಿಕ್ಕುತ್ತದೆ; ನ್ಯಾಯ ತೀರ್ಪಿನ ಕೊರತೆಯಿಂದ ಹಾಳಾಗುವದು ಉಂಟು.
13:24b.PRO.013.024 ಬೆತ್ತವನ್ನು ಹಿಡಿಯದವನು ತನ್ನ ಮಗನನ್ನು ಹಗೆ ಮಾಡುತ್ತಾನೆ; ಮುಂಚಿತವಾಗಿ ಶಿಕ್ಷಿಸುವವನು ಅವನನ್ನು ಪ್ರೀತಿಸುತ್ತಾನೆ.ತನಗೆ ತೃಪ್ತಿಯಾಗುವ ವರೆಗೆ ನೀತಿವಂತನು ತಿನ್ನುತ್ತಾನೆ; ದುಷ್ಟರ ಹೊಟ್ಟೆಗೆ ಕೊರತೆಯಾಗುವದು.
13:25b.PRO.013.025 ತನಗೆ ತೃಪ್ತಿಯಾಗುವ ವರೆಗೆ ನೀತಿವಂತನು ತಿನ್ನುತ್ತಾನೆ; ದುಷ್ಟರ ಹೊಟ್ಟೆಗೆ ಕೊರತೆಯಾಗುವದು.
14
14:1b.PRO.014.001 ಜ್ಞಾನಿಯಾದ ಪ್ರತಿ ಸ್ತ್ರೀಯು ತನ್ನ ಮನೆಯನ್ನು ಕಟ್ಟುತ್ತಾಳೆ; ಬುದ್ಧಿಹೀನಳೋ ತನ್ನ ಕೈಗಳಿಂದಲೇ ಅದನ್ನು ಕಿತ್ತುಹಾಕುತ್ತಾಳೆ.
14:2b.PRO.014.002 ತನ್ನ ಯಥಾರ್ಥತೆಯಲ್ಲಿ ನಡೆಯುವವನು ಕರ್ತನಿಗೆ ಭಯಪಡುತ್ತಾನೆ; ತನ್ನ ಮಾರ್ಗಗಳಲ್ಲಿ ವಕ್ರತೆಯುಳ್ಳವನು ಆತನನ್ನು ಅಸಡ್ಡೆಮಾಡುತ್ತಾನೆ.
14:3b.PRO.014.003 ಬುದ್ಧಿಹೀನನ ಬಾಯಿ ಯಲ್ಲಿ ಗರ್ವದ ಅಂಕುರವಿದೆ; ಜ್ಞಾನವಂತರ ತುಟಿಗಳು ಅವುಗಳನ್ನು ಕಾಯುವವು.
14:4b.PRO.014.004 ಎತ್ತುಗಳು ಇಲ್ಲದೆ ಇರು ವಲ್ಲಿ ಗೋದಲಿಯು ಶುದ್ಧಿಯಾಗಿದೆ; ಎತ್ತಿನ ಬಲದಿಂದ ಬಹಳ ವೃದ್ಧಿಯು ಉಂಟಾಗುತ್ತದೆ.
14:5b.PRO.014.005 ನಂಬತಕ್ಕ ಸಾಕ್ಷಿಯು ಸುಳ್ಳಾಡನು; ಅಬದ್ದಸಾಕ್ಷಿಯು ಸುಳ್ಳುಗಳನ್ನೇ ಉಚ್ಚರಿ ಸುತ್ತಾನೆ.
14:6b.PRO.014.006 ಹಾಸ್ಯ ಮಾಡುವವನು ಜ್ಞಾನವನ್ನು ಹುಡು ಕಿದರೂ ಅದನ್ನು ಕಂಡುಕೊಳ್ಳುವದಿಲ್ಲ; ವಿವೇಚಿಸುವವನಿಗೆ ತಿಳುವಳಿಕೆಯು ಸುಲಭವಾಗಿದೆ.
14:7b.PRO.014.007 ನೀನು ಬುದ್ಧಿಹೀನನಲ್ಲಿ ತಿಳುವಳಿಕೆಯ ತುಟಿಗಳನ್ನು ಕಾಣದೆ ಹೋದರೆ ಅವನ ಬಳಿಯಿಂದ ನೀನು ಹೋಗು.
14:8b.PRO.014.008 ಜಾಣನ ಜ್ಞಾನವು ತನ್ನ ಮಾರ್ಗವನ್ನು ಗ್ರಹಿಸುವಂತ ದ್ದಾಗಿದೆ; ಮೂಢರ ಬುದ್ಧಿಹೀನತೆಯು ಮೋಸಕರ.
14:9b.PRO.014.009 ಬುದ್ಧಿಹೀನರು ಪಾಪಕ್ಕೆ ಹಾಸ್ಯಮಾಡುತ್ತಾರೆ; ನೀತಿ ವಂತರಲ್ಲಿ ದಯೆ ಇದೆ.
14:10b.PRO.014.010 ಹೃದಯಕ್ಕೆ ತನ್ನ ವ್ಯಾಕುಲ ತೆಯು ತಿಳಿಯುತ್ತದೆ; ಪರನು ತನ್ನ ಸಂತೋಷದಲ್ಲಿ ಸೇರುವದಿಲ್ಲ.
14:11b.PRO.014.011 ದುಷ್ಟರ ಮನೆಯು ಕೆಡವಲ್ಪಡುವದು; ಯಥಾರ್ಥವಂತರ ಗುಡಾರವು ಏಳಿಗೆಯಾಗುವದು.
14:12b.PRO.014.012 ಒಬ್ಬ ಮನುಷ್ಯನಿಗೆ ಸರಿಯೆಂದು ತೋರುವ ಮಾರ್ಗ ವಿದೆ. ಅದರ ಅಂತ್ಯವು ಮರಣದ ಮಾರ್ಗಗಳೇ.
14:13b.PRO.014.013 ನಗೆಯಲ್ಲಿಯೂ ಹೃದಯವು ದುಃಖದಿಂದ ಇರು ವದು; ಅದರ ಉಲ್ಲಾಸದ ಅಂತ್ಯವು ವ್ಯಾಕುಲವೇ.
14:14b.PRO.014.014 ಹೃದಯದಲ್ಲಿ ಹಿಂಜರಿಯುವವನು ತನ್ನ ಸ್ವಂತ ಮಾರ್ಗಗಳಿಂದ ತುಂಬಿಕೊಳ್ಳುವನು; ಒಳ್ಳೆಯವನು ತನ್ನಲ್ಲಿ ತಾನೇ ತೃಪ್ತಿಹೊಂದುವನು.
14:15b.PRO.014.015 ಮೂಢರು ಪ್ರತಿಯೊಂದು ಮಾತನ್ನು ನಂಬುತ್ತಾರೆ; ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು.
14:16b.PRO.014.016 ಜ್ಞಾನಿ ಯು ಭಯಪಟ್ಟು ಕೆಟ್ಟತನದಿಂದ ಹೊರಟುಹೋಗು ವನು; ಬುದ್ಧಿಹೀನನು ಕೋಪಿಸಿಕೊಂಡು ಧೈರ್ಯದಿಂದ ಇರುತ್ತಾನೆ.
14:17b.PRO.014.017 ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುತ್ತಾನೆ; ಕುಯುಕ್ತಿಯುಳ್ಳವನು ಹಗೆಮಾಡು ತ್ತಾನೆ.
14:18b.PRO.014.018 ಮೂಢರು ಮೂರ್ಖತನಕ್ಕೆ ಬಾಧ್ಯರಾಗು ತ್ತಾರೆ; ಜಾಣರು ತಿಳುವಳಿಕೆಯ ಕಿರೀಟವನ್ನು ಪಡೆದು ಕೊಳ್ಳುತ್ತಾರೆ.
14:19b.PRO.014.019 ಒಳ್ಳೆಯವರಿಗೆ ದುಷ್ಟರು ಬಾಗುತ್ತಾರೆ; ದುಷ್ಟರು ನೀತಿವಂತರ ದ್ವಾರಗಳಲ್ಲಿ ಬಗ್ಗಿಕೊಳ್ಳುತ್ತಾರೆ.
14:20b.PRO.014.020 ಬಡವನು ತನ್ನ ನೆರೆಯವನಿಂದ ಹಗೆಮಾಡಲ್ಪಡುವನು; ಐಶ್ವರ್ಯವಂತನಿಗೆ ಬಹು ಜನ ಮಿತ್ರರು.
14:21b.PRO.014.021 ತನ್ನ ನೆರೆಯವನನ್ನು ಅವಮಾನ ಮಾಡುವವನು ಪಾಪ ಮಾಡುತ್ತಾನೆ; ಬಡವರ ಮೇಲೆ ಕನಿಕರ ತೋರಿ ಸುವವನು ಧನ್ಯನು.
14:22b.PRO.014.022 ಕೆಟ್ಟದ್ದನ್ನು ಕಲ್ಪಿಸುವವರು ತಪ್ಪು ಮಾಡುತ್ತಾರಲ್ಲವೇ? ಒಳ್ಳೆಯದನ್ನು ಕಲ್ಪಿಸುವವರಿಗೆ ಕರುಣೆಯೂ ಸತ್ಯವೂ ಇರುವವು.
14:23b.PRO.014.023 ಎಲ್ಲಾ ಪ್ರಯಾಸ ದಲ್ಲಿ ಲಾಭವಿದೆ; ತುಟಿಗಳ ಮಾತು ಬಡತನಕ್ಕೆ ಮಾತ್ರ ದಾರಿ.
14:24b.PRO.014.024 ಜ್ಞಾನವಂತರ ಕಿರೀಟವು ಅದರ ಐಶ್ವ ರ್ಯವೇ; ಬುದ್ಧಿಹೀನರ ಬುದ್ಧಿಹೀನತೆಯು ಅವರ ಮೂರ್ಖತನವೇ.
14:25b.PRO.014.025 ಸತ್ಯ ಸಾಕ್ಷಿಯು ಪ್ರಾಣಗಳನ್ನು ತಪ್ಪಿಸುತ್ತಾನೆ; ಮೋಸದ ಸಾಕ್ಷಿಯು ಸುಳ್ಳುಗಳನ್ನು ಆಡು ತ್ತಾನೆ.
14:26b.PRO.014.026 ಕರ್ತನ ಭಯವೇ ಬಲವಾದ ಭರವಸವು; ಆತನ ಮಕ್ಕಳಿಗೆ ಆಶ್ರಯ ಸ್ಥಳವು ಇರುವದು.
14:27b.PRO.014.027 ಮರಣದ ಪಾಶಗಳಿಂದ ತೊಲಗುವದಕ್ಕೆ ಕರ್ತನ ಭಯವು ಜೀವದ ಬುಗ್ಗೆ.
14:28b.PRO.014.028 ಜನ ಸಮೂಹದಲ್ಲಿ ಅರಸನ ಘನತೆ ಇದೆ; ಜನರ ಕೊರತೆಯಲ್ಲಿ ರಾಜಪುತ್ರನ ನಾಶ.
14:29b.PRO.014.029 ಕೋಪಕ್ಕೆ ನಿಧಾನಿಸು. ದೀರ್ಘಶಾಂತನು ದೊಡ್ಡವಿವೇಕಿ; ಆತ್ಮದಲ್ಲಿ ಆತುರಪಡುವವನು ಮೂಢ ತೆಯನ್ನು ವೃದ್ಧಿಮಾಡುವನು.
14:30b.PRO.014.030 ಸ್ವಸ್ಥವಾದ ಹೃದಯವು ದೇಹಕ್ಕೆ ಜೀವ; ಮತ್ಸರವು ಎಲುಬುಗಳಿಗೆ ಕ್ಷಯವು.
14:31b.PRO.014.031 ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನನ್ನು ಹೀನೈಸುವನು; ಆತನನ್ನು ಸನ್ಮಾನಿಸುವವನು ಬಡವರನ್ನು ಕನಿಕರಿಸುತ್ತಾನೆ.
14:32b.PRO.014.032 ದುಷ್ಟನು ತನ್ನ ದುಷ್ಟತನದಲ್ಲಿ ನೂಕ ಲ್ಪಡುತ್ತಾನೆ; ಮರಣದಲ್ಲಿ ನೀತಿವಂತನಿಗೆ ನಿರೀಕ್ಷೆ ಇದೆ.
14:33b.PRO.014.033 ತಿಳುವಳಿಕೆಯುಳ್ಳವನ ಹೃದಯದಲ್ಲಿ ಜ್ಞಾನವು ನೆಲೆ ಯಾಗಿದೆ; ಬುದ್ಧಿಹೀನರಲ್ಲಿರುವದು ಪ್ರಕಟವಾಗುತ್ತದೆ.
14:34b.PRO.014.034 ನೀತಿಯು ಜನಾಂಗವನ್ನು ವೃದ್ಧಿಮಾಡುತ್ತದೆ; ಯಾವ ಪ್ರಜೆಗಾದರೂ ಪಾಪವು ಅವಮಾನವಾಗಿದೆ.ಜ್ಞಾನ ವುಳ್ಳ ಸೇವಕನ ಕಡೆಗೆ ಅರಸನ ದಯೆ ಇದೆ; ನಾಚಿಕೆ ಪಡಿಸುವವನ ಕಡೆಗೆ ಅವನ ರೌದ್ರವಿದೆ.
14:35b.PRO.014.035 ಜ್ಞಾನ ವುಳ್ಳ ಸೇವಕನ ಕಡೆಗೆ ಅರಸನ ದಯೆ ಇದೆ; ನಾಚಿಕೆ ಪಡಿಸುವವನ ಕಡೆಗೆ ಅವನ ರೌದ್ರವಿದೆ.
15
15:1b.PRO.015.001 ಮೃದುವಾದ ಪ್ರತ್ಯುತ್ತರವು ಕೋಪವನ್ನು ತಿರುಗಿಸಿಬಿಡುತ್ತದೆ; ತೀಕ್ಷ್ಣವಾದ ಮಾತು ಗಳು ಕೋಪವನ್ನು ಎಬ್ಬಿಸುತ್ತವೆ.
15:2b.PRO.015.002 ಜ್ಞಾನಿಯ ನಾಲಿ ಗೆಯು ತಿಳುವಳಿಕೆಯನ್ನು ಸರಿಯಾಗಿ ಉಪಯೋಗಿ ಸುತ್ತದೆ. ಬುದ್ಧಿಹೀನರ ಬಾಯಿಯು ಬುದ್ಧಿಹೀನತೆಯನ್ನು ಹೊರಗೆಡುವುತ್ತದೆ.
15:3b.PRO.015.003 ಕೆಟ್ಟವರನ್ನು ಒಳ್ಳೆಯವರನ್ನು ನೋಡುತ್ತಾ ಕರ್ತನ ಕಣ್ಣುಗಳು ಪ್ರತಿಯೊಂದು ಸ್ಥಳ ದಲ್ಲಿವೆ.
15:4b.PRO.015.004 ಹಿತವಾದ ನಾಲಿಗೆಯು ಜೀವವೃಕ್ಷ; ಅದರಲ್ಲಿ ಮೂರ್ಖತ್ವವು ಆತ್ಮಕ್ಕೆ ಒಡಕು.
15:5b.PRO.015.005 ತನ್ನ ತಂದೆಯ ಬೋಧನೆಯನ್ನು ಬುದ್ಧಿಹೀನನು ತಿರಸ್ಕರಿಸುತ್ತಾನೆ. ವಿವೇಕಿಯು ಗದರಿಕೆಯನ್ನು ಲಕ್ಷಿಸುವನು;
15:6b.PRO.015.006 ನೀತಿವಂತನ ಮನೆಯಲ್ಲಿ ಬಹಳ ಸಂಪತ್ತು; ದುಷ್ಟನ ಆದಾಯಗಳಲ್ಲಿ ತೊಂದರೆ ಇರುವದು.
15:7b.PRO.015.007 ಜ್ಞಾನಿಗಳ ತುಟಿಗಳು ತಿಳುವ ಳಿಕೆಯನ್ನು ಚೆಲ್ಲುತ್ತವೆ; ಬುದ್ಧಿಹೀನರ ಹೃದಯವು ಹಾಗೆ ಮಾಡುವದೇ ಇಲ್ಲ.
15:8b.PRO.015.008 ದುಷ್ಟರ ಯಜ್ಞವು ಕರ್ತನಿಗೆ ಅಸಹ್ಯ; ಯಥಾರ್ಥವಂತರ ಪ್ರಾರ್ಥನೆಯು ಆತನ ಆನಂದವು.
15:9b.PRO.015.009 ದುಷ್ಟರ ಮಾರ್ಗವು ಕರ್ತನಿಗೆ ಅಸಹ್ಯ; ನೀತಿಯನ್ನು ಹಿಂಬಾಲಿಸುವವನನ್ನು ಆತನು ಪ್ರೀತಿಸು ತ್ತಾನೆ.
15:10b.PRO.015.010 ಮಾರ್ಗವನ್ನು ತೊರೆದುಬಿಟ್ಟವನಿಗೆ ಶಿಕ್ಷೆಯು ಕಠಿಣವಾಗಿದೆ; ಗದರಿಕೆಯನ್ನು ಹಗೆಮಾಡುವವನು ಸಾಯುವನು.
15:11b.PRO.015.011 ಪಾತಾಳವೂ ನಾಶನವೂ ಕರ್ತನ ಎದುರಿನಲ್ಲಿವೆ; ಹಾಗಾದರೆ ಮನುಷ್ಯರ ಹೃದಯಗಳು ಇನ್ನೂ ಎಷ್ಟೋ ಹೆಚ್ಚಾಗಿ ಆತನ ಮುಂದೆ ಇವೆಯಲ್ಲವೇ.
15:12b.PRO.015.012 ತನ್ನನ್ನು ಗದರಿಸುವವನು ಪರಿಹಾಸ್ಯಕರನನ್ನು ಪ್ರೀತಿ ಮಾಡುವದಿಲ್ಲ, ಇಲ್ಲವೆ ಅವನು ಜ್ಞಾನಿಗಳ ಕಡೆಗೆ ಹೋಗುವದು ಇಲ್ಲ.
15:13b.PRO.015.013 ಸಂತೋಷಪಡುವ ಹೃದ ಯವು ಕಾಂತಿಯುಳ್ಳ ಮುಖಭಾವ ತೋರುವದು; ಹೃದಯ ವೇದನೆಯಿಂದ ಆತ್ಮವು ಕುಂದಿಹೋಗುತ್ತದೆ.
15:14b.PRO.015.014 ವಿವೇಕವುಳ್ಳವನ ಹೃದಯವು ತಿಳುವಳಿಕೆಯನ್ನು ಹುಡುಕುತ್ತದೆ; ಬುದ್ಧಿಹೀನರ ಬಾಯಿಯು ಬುದ್ಧಿಹೀನತೆ ಯನ್ನೇ ತಿನ್ನುತ್ತದೆ.
15:15b.PRO.015.015 ಬಾಧಿತರ ದಿನಗಳೆಲ್ಲವೂ ಕೆಟ್ಟ ವುಗಳೇ. ಸಂತೋಷ ಹೃದಯವುಳ್ಳವನಿಗೆ ನಿತ್ಯವೂ ಔತಣ.
15:16b.PRO.015.016 ಕಳವಳದಿಂದ ಕೂಡಿದ ದೊಡ್ಡ ಸಂಪತ್ತಿ ಗಿಂತ ಕರ್ತನ ಭಯದಿಂದ ಕೂಡಿದ ಸ್ವಲ್ಪವೇ ಉತ್ತಮ ವಾಗಿದೆ.
15:17b.PRO.015.017 ದ್ವೇಷವಿರುವಲ್ಲಿ ಕೊಬ್ಬಿದ ಎತ್ತಿನ ಮಾಂಸ ಕ್ಕಿಂತ ಪ್ರೀತಿ ಇರುವಲ್ಲಿ ಸಸ್ಯಹಾರವು ಉತ್ತಮ.
15:18b.PRO.015.018 ಕೋಪಿಷ್ಠನು ವಿವಾದವನ್ನು ಎಬ್ಬಿಸುವನು; ದೀರ್ಘ ಶಾಂತನು ವಿವಾದವನ್ನು ಶಮನಪಡಿಸುತ್ತಾನೆ.
15:19b.PRO.015.019 ಸೋಮಾರಿಯ ಮಾರ್ಗವು ಮುಳ್ಳಿನ ಬೇಲಿಯಂತೆ ಇದೆ; ನೀತಿವಂತನ ಮಾರ್ಗವು ಸರಾಗವಾಗಿದೆ.
15:20b.PRO.015.020 ಜ್ಞಾನಿಯಾದ ಮಗನು ತಂದೆಯನ್ನು ಉಲ್ಲಾಸ ಗೊಳಿಸುತ್ತಾನೆ; ಬುದ್ಧಿಹೀನನಾದರೋ ತನ್ನ ತಾಯಿ ಯನ್ನು ತಿರಸ್ಕರಿಸುತ್ತಾನೆ.
15:21b.PRO.015.021 ಜ್ಞಾನಹೀನನಿಗೆ ಮೂರ್ಖ ತನವು ಆನಂದವಾಗಿದೆ; ವಿವೇಕಿಯಾದರೋ ಯಥಾ ರ್ಥವಾಗಿ ನಡೆಯುತ್ತಾನೆ.
15:22b.PRO.015.022 ಆಲೋಚನೆಯಿಲ್ಲದೆ ಉದ್ದೇಶಗಳು ಸಫಲವಾಗುವದಿಲ್ಲ; ಬಹುಮಂದಿ ಸಲಹೆಗಾರರಿರುವಲ್ಲಿ ಅವು ಸ್ಥಿರಗೊಳ್ಳುತ್ತವೆ.
15:23b.PRO.015.023 ತನ್ನ ಬಾಯಿಯ ಪ್ರತ್ಯುತ್ತರದಿಂದ ಮನುಷ್ಯನಿಗೆ ಆನಂದವಾ ಗುತ್ತದೆ; ತಕ್ಕಕಾಲದಲ್ಲಿ ಆಡಿದ ಮಾತು ಎಷ್ಟೋ ಒಳ್ಳೇದು!
15:24b.PRO.015.024 ಕೆಳಗಿನ ಪಾತಾಳವನ್ನು ತಪ್ಪಿಸಿಕೊಳ್ಳುವ ದಕ್ಕಾಗಿ ಜ್ಞಾನಿಗಳಿಗೆ ಜೀವದ ಮಾರ್ಗವು ಎತ್ತರದಲ್ಲಿದೆ.
15:25b.PRO.015.025 ಕರ್ತನು ಗರ್ವಿಷ್ಟರ ಮನೆಯನ್ನು ಹಾಳುಮಾಡು ವನು; ವಿಧವೆಯರ ಮೇರೆಯನ್ನು ಆತನು ನೆಲೆಗೊಳಿಸು ವನು.
15:26b.PRO.015.026 ದುಷ್ಟರ ಆಲೋಚನೆಯು ಕರ್ತನಿಗೆ ಅಸಹ್ಯವಾಗಿದೆ; ಶುದ್ಧನ ಮಾತುಗಳು ಸಂತೋಷಕರ ವಾದ ಮಾತುಗಳೇ.
15:27b.PRO.015.027 ದುರ್ಲಾಭಾಪೇಕ್ಷಕನು ತನ್ನ ಮನೆಯನ್ನು ಬಾಧಿಸುತ್ತಾನೆ; ಲಂಚವನ್ನು ಹಗೆಮಾಡುವ ವನು ಬದುಕುವನು.
15:28b.PRO.015.028 ನೀತಿವಂತರ ಹೃದಯವು ಉತ್ತರಕೊಡುವದಕ್ಕೆ ಅಭ್ಯಾಸಿಸುತ್ತದೆ; ದುಷ್ಟರ ಬಾಯಿ ಯು ಕೆಟ್ಟವುಗಳನ್ನು ಹೊರಗೆಡವುತ್ತದೆ.
15:29b.PRO.015.029 ಕರ್ತನು ದುಷ್ಟರಿಗೆ ದೂರ; ನೀತಿವಂತರ ಪ್ರಾರ್ಥನೆಯನ್ನು ಆತನು ಕೇಳುತ್ತಾನೆ.
15:30b.PRO.015.030 ಕಣ್ಣುಗಳ ಬೆಳಕು ಹೃದಯವನ್ನು ಸಂತೋಷಪಡಿಸುತ್ತದೆ; ಒಳ್ಳೆಯ ವಾರ್ತೆಯು ಎಲುಬು ಗಳನ್ನು ಪುಷ್ಟಿಮಾಡುತ್ತದೆ.
15:31b.PRO.015.031 ಜೀವದ ಗದರಿಕೆಗೆ ಕಿವಿ ಗೊಡುವವನು ಜ್ಞಾನಿಗಳ ನಡುವೆ ವಾಸವಾಗಿದ್ದಾನೆ.
15:32b.PRO.015.032 ಶಿಕ್ಷಣವನ್ನು ನಿರಾಕರಿಸುವವನು ತನ್ನ ಪ್ರಾಣವನ್ನೇ ತಿರಸ್ಕರಿಸುತ್ತಾನೆ; ಗದರಿಕೆಗೆ ಕಿವಿಗೊಡುವವನು ವಿವೇಕ ವನ್ನು ಪಡೆಯುತ್ತಾನೆ.ಕರ್ತನ ಭಯವು ಜ್ಞಾನೋ ಪದೇಶ; ಗೌರವಕ್ಕೆ ಮೊದಲು ವಿನಯ.
15:33b.PRO.015.033 ಕರ್ತನ ಭಯವು ಜ್ಞಾನೋ ಪದೇಶ; ಗೌರವಕ್ಕೆ ಮೊದಲು ವಿನಯ.
16
16:1b.PRO.016.001 ಮನುಷ್ಯನಲ್ಲಿ ಹೃದಯದ ಸಿದ್ಧತೆಗಳೂ ಬಾಯಿಯ ಪ್ರತ್ಯುತ್ತರವೂ ಕರ್ತನಿಂದಲೇ ಆಗುವವು.
16:2b.PRO.016.002 ಮನುಷ್ಯನ ಮಾರ್ಗಗಳೆಲ್ಲಾ ತನ್ನ ಕಣ್ಣುಗಳ ಮುಂದೆ ಶುದ್ಧವಾಗಿವೆ; ಕರ್ತನು ಆತ್ಮಗಳನ್ನು ತೂಗಿಸುತ್ತಾನೆ.
16:3b.PRO.016.003 ನಿನ್ನ ಕಾರ್ಯಗಳನ್ನು ಕರ್ತನಿಗೆ ಒಪ್ಪಿಸಿದರೆ ನಿನ್ನ ಆಲೋಚನೆಗಳು ಸ್ಥಿರವಾಗುವವು.
16:4b.PRO.016.004 ಎಲ್ಲವುಗಳನ್ನು ಕರ್ತನು ತನಗಾಗಿ ಮಾಡಿದ್ದಾನೆ; ಹೌದು, ಕೇಡಿನ ದಿನಕ್ಕಾಗಿಯೂ ಕೆಡುಕರನ್ನು ಮಾಡಿ ದ್ದಾನೆ.
16:5b.PRO.016.005 ಹೃದಯದಲ್ಲಿ ಗರ್ವಿಷ್ಠನಾದ ಪ್ರತಿಯೊಬ್ಬನೂ ಕರ್ತನಿಗೆ ಅಸಹ್ಯ. ಕೈಗೆ ಕೈ ಕೊಟ್ಟರೂ ದುಷ್ಟನು ಶಿಕ್ಷಿಸಲ್ಪಡದೆ ಇರುವದಿಲ್ಲ.
16:6b.PRO.016.006 ಕನಿಕರ ಮತ್ತು ಸತ್ಯದಿಂದ ಅಕ್ರಮವು ಶುದ್ಧೀಕರಿಸಲ್ಪಡುತ್ತದೆ; ಕರ್ತನ ಭಯದ ಮೂಲಕ ಮನುಷ್ಯರು ಕೆಟ್ಟದ್ದರಿಂದ ತೊಲಗುತ್ತಾರೆ.
16:7b.PRO.016.007 ಮನುಷ್ಯನ ಮಾರ್ಗಗಳು ಕರ್ತನನ್ನು ಮೆಚ್ಚಿಸಿದಾಗ ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನ ದಲ್ಲಿರುವಂತೆ ಆತನು ಮಾಡುತ್ತಾನೆ.
16:8b.PRO.016.008 ಅನ್ಯಾಯದ ಬಹು ಆದಾಯಕ್ಕಿಂತಲೂ ನೀತಿಯೊಂದಿಗಿರುವ ಸ್ವಲ್ಪವೇ ಉತ್ತಮ.
16:9b.PRO.016.009 ಒಬ್ಬ ಮನುಷ್ಯನ ಹೃದಯವು ಅವನ ಮಾರ್ಗವನ್ನು ಕಲ್ಪಿಸುತ್ತದೆ; ಆದರೆ ಕರ್ತನು ಅವನ ಹೆಜ್ಜೆಗಳನ್ನು ನಡಿಸುತ್ತಾನೆ.
16:10b.PRO.016.010 ಅರಸನ ತುಟಿ ಗಳಲ್ಲಿ ದೈವೋಕ್ತಿ; ನ್ಯಾಯತೀರ್ಪಿನಲ್ಲಿ ಅವನ ಬಾಯಿ ಯು ದೋಷಮಾಡುವದಿಲ್ಲ.
16:11b.PRO.016.011 ನ್ಯಾಯದ ತೂಕವೂ ತಕ್ಕಡಿಯೂ ಕರ್ತನವು; ಚೀಲದ ತೂಕಗಳು ಆತನ ಕೈಕೆಲಸವೇ.
16:12b.PRO.016.012 ಕೆಟ್ಟದ್ದನ್ನು ಮಾಡುವವರು ರಾಜರಿಗೆ ಅಸಹ್ಯರು; ನೀತಿಯಿಂದ ಸಿಂಹಾಸನವು ಸ್ಥಾಪಿಸಲ್ಪಡು ತ್ತದೆ.
16:13b.PRO.016.013 ನೀತಿಯ ತುಟಿಗಳು ಅರಸರ ಆನಂದ. ನ್ಯಾಯ ವಾದದ್ದನ್ನು ಮಾತನಾಡುವವನನ್ನು ಅವರು ಪ್ರೀತಿಸು ತ್ತಾರೆ.
16:14b.PRO.016.014 ಅರಸನ ಕೋಪವು ಮೃತ್ಯುವಿನ ದೂತರಂತೆ ಇರುತ್ತದೆ; ಜ್ಞಾನಿಯು ಅದನ್ನು ಶಮನಪಡಿಸುವನು.
16:15b.PRO.016.015 ಅರಸನ ಮುಖದ ಬೆಳಕಿನಲ್ಲಿ ಜೀವ; ಅವನ ದಯೆಯು ಹಿಂಗಾರು ಮಳೆಯ ಮೇಘದಂತಿದೆ.
16:16b.PRO.016.016 ಬಂಗಾರಕ್ಕಿಂತ ಜ್ಞಾನವನ್ನು ಪಡೆಯುವದು ಎಷ್ಟೋ ಮೇಲು! ಬೆಳ್ಳಿಗಿಂತ ವಿವೇಕವನ್ನು ಆರಿಸಿಕೊಳ್ಳುವದು ಎಷ್ಟೋ ಉತ್ತಮ.
16:17b.PRO.016.017 ಯಥಾರ್ಥವಂತರ ಹೆದ್ದಾರಿಯು ಕೆಟ್ಟತನದಿಂದ ತೊಲಗುವಂಥದ್ದಾಗಿದೆ. ತನ್ನ ಮಾರ್ಗ ವನ್ನು ಕಾಯುವವನು ತನ್ನ ಪ್ರಾಣವನ್ನು ಕಾಪಾಡಿ ಕೊಳ್ಳುತ್ತಾನೆ.
16:18b.PRO.016.018 ನಾಶನಕ್ಕೆ ಮುಂದಾಗಿ ಗರ್ವ ಹೋಗು ತ್ತದೆ; ಬೀಳುವಿಕೆಯ ಮುಂಚೆ ಜಂಬದ ಮನಸ್ಸು.
16:19b.PRO.016.019 ಅಹಂಕಾರಿಗಳೊಂದಿಗೆ ಕೊಳ್ಳೆಯನ್ನು ಹಂಚಿಕೊಳ್ಳು ವದಕ್ಕಿಂತ ದೀನರೊಂದಿಗೆ ವಿನಯ ಮನಸ್ಸುಳ್ಳವರಾಗಿ ಇರುವದು ಉತ್ತಮ.
16:20b.PRO.016.020 ಕಾರ್ಯವನ್ನು ಜ್ಞಾನದಿಂದ ನಡಿಸುವವನು ಒಳ್ಳೇದನ್ನು ಪಡೆಯುವನು; ಕರ್ತನಲ್ಲಿ ಭರವಸವಿಡುವವನು ಧನ್ಯನು.
16:21b.PRO.016.021 ಹೃದಯದಲ್ಲಿ ಜ್ಞಾನ ವಂತರು ಜಾಣರೆಂದು ಕರೆಯಲ್ಪಡುವರು; ತುಟಿಗಳ ಮಧುರವು ಜ್ಞಾನವನ್ನು ಹೆಚ್ಚಿಸುತ್ತದೆ.
16:22b.PRO.016.022 ವಿವೇಕಿಗೆ ವಿವೇಕವೇ ಜೀವದ ಬುಗ್ಗೆ. ಬುದ್ಧಿಹೀನರ ಬೋಧ ನೆಯು ಮೂರ್ಖತನ.
16:23b.PRO.016.023 ಜ್ಞಾನಿಯ ಹೃದಯವು ಬಾಯಿಗೆ ಬೋಧಿಸಿ ತನ್ನ ತುಟಿಗಳಿಗೆ ಜ್ಞಾನವನ್ನು ಹೆಚ್ಚಿಸುತ್ತದೆ.
16:24b.PRO.016.024 ಮನೋಹರವಾದ ಮಾತುಗಳು ಜೇನು ತುಪ್ಪದಂತೆ ಪ್ರಾಣಕ್ಕೆ ಮಧುರವೂ ಎಲುಬು ಗಳಿಗೆ ಕ್ಷೇಮವೂ ಆಗಿವೆ.
16:25b.PRO.016.025 ಮನುಷ್ಯರಿಗೆ ಸರಿಯಾಗಿ ತೋರುವ ಒಂದು ಮಾರ್ಗ ಉಂಟು; ಅದರ ಅಂತ್ಯವು ಮರಣದ ಮಾರ್ಗವೇ.
16:26b.PRO.016.026 ದುಡಿಯುವವನು ತನ ಗಾಗಿಯೇ ದುಡಿಯುತ್ತಾನೆ; ಅವನ ಬಾಯಿಯು ಅದ ಕ್ಕಾಗಿ ಹಂಬಲಿಸುತ್ತದೆ.
16:27b.PRO.016.027 ಭಕ್ತಿಹೀನನು ದುಷ್ಟತ್ವವನ್ನು ಅಗೆಯುತ್ತಾನೆ; ಅವನ ತುಟಿಗಳು ಉರಿಯುವ ಬೆಂಕಿ ಯಂತಿವೆ.
16:28b.PRO.016.028 ಮೂರ್ಖನು ಜಗಳವನ್ನು ಬಿತ್ತುತ್ತಾನೆ; ಪಿಸುಗುಟ್ಟುವವನು ಪ್ರಮುಖ ಸ್ನೇಹಿತರನ್ನು ಅಗಲಿಸು ತ್ತಾನೆ.
16:29b.PRO.016.029 ಬಲಾತ್ಕಾರಿಯು ನೆರೆಯವನನ್ನು ಮರುಳು ಗೊಳಿಸಿ ದುರ್ಮಾರ್ಗಕ್ಕೆ ನಡಿಸುತ್ತಾನೆ.
16:30b.PRO.016.030 ವಕ್ರ ಬುದ್ಧಿಯ ಒಳಸಂಚುಗಳಿಗೆ ಅವನು ತನ್ನ ಕಣ್ಣುಗಳನ್ನು ಮುಚ್ಚಿಕೊಳ್ಳುತ್ತಾನೆ; ತನ್ನ ತುಟಿಗಳನ್ನು ಕದಲಿಸುತ್ತಾ ಕೆಟ್ಟದ್ದು ಸಂಭವಿಸುವಂತೆ ಮಾಡುತ್ತಾನೆ.
16:31b.PRO.016.031 ನೀತಿಯ ಮಾರ್ಗದಲ್ಲಿ ಕಾಣಿಸಲ್ಪಟ್ಟರೆ ನರೆತಲೆಯು ಸುಂದರ ಕಿರೀಟವಾಗಿವೆ.
16:32b.PRO.016.032 ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠನು, ತನ್ನ ಮನಸ್ಸನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಉತ್ತಮನು.ಉಡಿಲಲ್ಲಿ ಚೀಟು ಹಾಕಬಹುದು; ಅದನ್ನು ಸ್ಥಿತಿಗೆ ತರುವಂತದ್ದು ಕರ್ತನದೇ.
16:33b.PRO.016.033 ಉಡಿಲಲ್ಲಿ ಚೀಟು ಹಾಕಬಹುದು; ಅದನ್ನು ಸ್ಥಿತಿಗೆ ತರುವಂತದ್ದು ಕರ್ತನದೇ.
17
17:1b.PRO.017.001 ವಿವಾದದೊಂದಿಗೆ ಬಲಿಗಳಿಂದ ತುಂಬಿದ ಮನೆಗಿಂತ ಸಮಾಧಾನದ ಒಣತುತ್ತೇ ಮೇಲು.
17:2b.PRO.017.002 ನಾಚಿಕೆಪಡಿಸುವ ಮಗನ ಮೇಲೆ ಜ್ಞಾನಿ ಯಾದ ಸೇವಕನು ಆಳುವವನಾಗಿ ಸಹೋದರರಲ್ಲಿ ಬಾಧ್ಯತೆಗೆ ಪಾಲುಗಾರನಾಗುವನು.
17:3b.PRO.017.003 ಬೆಳ್ಳಿ ಬಂಗಾರ ಗಳನ್ನು ಪುಟ ಕುಲುಮೆಗಳು ಶೋಧಿಸುವವು, ಕರ್ತನು ಹೃದಯಗಳನ್ನು ಶೋಧಿಸುತ್ತಾನೆ.
17:4b.PRO.017.004 ಕೇಡು ಮಾಡುವ ವನು ಕೆಟ್ಟ ತುಟಿಗಳಿಗೆ ಕಿವಿಗೊಡುತ್ತಾನೆ; ಸುಳ್ಳುಗಾರನು ನೀಚವಾದ ನಾಲಿಗೆಗೆ ಕಿವಿಗೊಡುವನು;
17:5b.PRO.017.005 ಬಡವರನ್ನು ಹಾಸ್ಯಮಾಡುವವನು ತನ್ನ ಸೃಷ್ಟಿ ಕರ್ತ ನನ್ನೇ ನಿಂದಿಸುತ್ತಾನೆ; ವಿಪತ್ತುಗಳಿಗೆ ಸಂತೋಷಿಸು ವವನು ಶಿಕ್ಷೆಯನ್ನು ಹೊಂದಲೇಬೇಕು.
17:6b.PRO.017.006 ಮಕ್ಕಳ ಮಕ್ಕಳು ವೃದ್ಧರಿಗೆ ಕಿರೀಟ; ಮಕ್ಕಳ ಭೂಷಣವು ಅವರ ತಂದೆ ಗಳೇ.
17:7b.PRO.017.007 ಬುದ್ಧಿಹೀನನಿಗೆ ಉತ್ತಮವಾದ ನುಡಿಯುಕ್ತ ವಲ್ಲ; ರಾಜಪುತ್ರನಿಗೆ ಸುಳ್ಳಾಡುವ ತುಟಿಗಳು ಇನ್ನೂ ಎಷ್ಟೋ ಹೆಚ್ಚಾಗಿ ಯುಕ್ತವಲ್ಲ.
17:8b.PRO.017.008 ತಕ್ಕೊಳ್ಳುವವನ ಕಣ್ಣುಗಳಿಗೆ ಲಂಚವು ಬೆಲೆಯುಳ್ಳ ಕಲ್ಲಿನಂತಿದೆ; ಅದನ್ನು ಹೇಗೆ ತಿರುಗಿಸಿದರೂ ಅಭಿವೃದ್ಧಿಯಾಗುತ್ತದೆ.
17:9b.PRO.017.009 ದೋಷ ವನ್ನು ಮುಚ್ಚುವವನು ಪ್ರೀತಿಯನ್ನು ಹುಡುಕುತ್ತಾನೆ, ಸಂಗತಿಯನ್ನು ಎತ್ತಿ ಆಡುವವನು ಸ್ನೇಹಿತರನ್ನು ಪ್ರತ್ಯೇ ಕಿಸುತ್ತಾನೆ.
17:10b.PRO.017.010 ಬುದ್ಧಿಹೀನನಿಗೆ ನೂರು ಪೆಟ್ಟುಗಳಿಗಿಂತ ಜ್ಞಾನಿಗೆ ಒಂದು ಗದರಿಕೆಯ ಮಾತು ಹೆಚ್ಚಾಗಿ ನಾಟು ತ್ತದೆ.
17:11b.PRO.017.011 ಕೆಟ್ಟವನು ದಂಗೆಯನ್ನೇ ಹುಡುಕುತ್ತಾನೆ; ಆದ ಕಾರಣ ಕ್ರೂರ ಸೇವಕನು ಅವನಿಗೆ ವಿರೋಧವಾಗಿ ಕಳುಹಿಸಲ್ಪಡುವನು.
17:12b.PRO.017.012 ಮೂರ್ಖತನದಲ್ಲಿ ಮುಳುಗಿ ರುವ ಮೂಢನಿಗೆ ಎದುರಾಗುವದಕ್ಕಿಂತಲೂ ಮರಿಗ ಳನ್ನು ಕಳೆದುಕೊಂಡ ಕರಡಿಗೆ ಎದುರಾಗುವದು ಲೇಸು.
17:13b.PRO.017.013 ಉಪಕಾರಕ್ಕೆ ಅಪಕಾರವನ್ನು ಮಾಡುವವನ ಮನೆ ಯಿಂದ ಕೇಡು ತೊಲಗುವದೇ ಇಲ್ಲ.
17:14b.PRO.017.014 ಒಬ್ಬನು ನೀರನ್ನು ಹೊರಬಿಡುವಂತೆ ಕಲಹದ ಪ್ರಾರಂಭವು ಇರುವದು. ಆದಕಾರಣ ಆ ಕಲಹಕ್ಕೆ ಕೈ ಹಾಕುವದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು.
17:15b.PRO.017.015 ದುಷ್ಟರನ್ನು ನೀತಿ ವಂತರೆಂದು ನಿರ್ಣಯಿಸುವವನೂ ನೀತಿವಂತನನ್ನು ದಂಡನೆಗೆ ಗುರಿಮಾಡುವವನೂ ಇವರಿಬ್ಬರೂ ಕರ್ತ ನಿಗೆ ಅಸಹ್ಯರು.
17:16b.PRO.017.016 ಬುದ್ಧಿಹೀನನಿಗೆ ಮನಸ್ಸಿಲ್ಲದೆ ಇರು ವದರಿಂದ ಜ್ಞಾನವನ್ನು ಸಂಪಾದಿಸುವದಕ್ಕೆ ಅವನ ಕೈಯಲ್ಲಿ ಕ್ರಯ ಯಾಕೆ?
17:17b.PRO.017.017 ಸ್ನೇಹಿತನು ಎಲ್ಲಾ ಸಮ ಯಗಳಲ್ಲಿ ಪ್ರೀತಿಸುತ್ತಾನೆ; ಇಕ್ಕಟ್ಟಿಗೋಸ್ಕರ ಸಹೋ ದರನು ಹುಟ್ಟಿದ್ದಾನೆ.
17:18b.PRO.017.018 ವಿವೇಕವಿಲ್ಲದವನು ಕೈ ಮೇಲೆ ಹೊಡೆದು ತನ್ನ ಸ್ನೇಹಿತನ ಎದುರಿನಲ್ಲಿ ಹೊಣೆ ಯಾಗುತ್ತಾನೆ.
17:19b.PRO.017.019 ಕಲಹವನ್ನು ಪ್ರೀತಿಮಾಡುವವನು ದೋಷವನ್ನು ಪ್ರೀತಿಮಾಡುತ್ತಾನೆ; ತನ್ನ ದ್ವಾರವನ್ನು ಹೆಚ್ಚಿಸಿಕೊಳ್ಳುವವನು ನಾಶನವನ್ನು ಹುಡುಕುತ್ತಾನೆ.
17:20b.PRO.017.020 ಮೂರ್ಖ ಹೃದಯವುಳ್ಳವನು ಒಳ್ಳೇದನ್ನು ಪಡೆ ಯನು; ಕೆಟ್ಟನಾಲಿಗೆಯುಳ್ಳವನು ಹಾನಿಗೆ ಬೀಳುವನು.
17:21b.PRO.017.021 ಬುದ್ಧಿಹೀನನನ್ನು ಹೆತ್ತವನಿಗೆ ವ್ಯಥೆ; ಬುದ್ಧಿಹೀನನ ತಂದೆಗೆ ಸಂತೋಷವಿರುವದಿಲ್ಲ.
17:22b.PRO.017.022 ಹರ್ಷ ಹೃದಯನು ಔಷಧದಂತೆ ಒಳ್ಳೇದು ಮಾಡುತ್ತಾನೆ; ಕುಗ್ಗಿದ ಮನಸ್ಸು ಎಲುಬುಗಳನ್ನು ಒಣಗಿಸುತ್ತದೆ.
17:23b.PRO.017.023 ನ್ಯಾಯದ ಮಾರ್ಗ ಗಳನ್ನು ತಿರುಗಿಸಿಬಿಡುವದಕ್ಕೆ ದುಷ್ಟನು ಎದೆಯಿಂದ ಲಂಚವನ್ನು ತೆಗೆದುಕೊಳ್ಳುತ್ತಾನೆ.
17:24b.PRO.017.024 ವಿವೇಕಿಯ ಮುಂದೆ ಜ್ಞಾನವಿದೆ; ಬುದ್ಧಿಹೀನನ ಕಣ್ಣುಗಳು ಭೂಮಿಯ ಅಂತ್ಯಗಳಲ್ಲಿ ಇರುವವು.
17:25b.PRO.017.025 ಬುದ್ಧಿಹೀನ ನಾದ ಮಗನು ತನ್ನ ತಂದೆಗೆ ದುಃಖವೂ ತನ್ನನ್ನು ಹೆತ್ತವಳಿಗೆ ಕಹಿಯೂ ಆಗಿದ್ದಾನೆ.
17:26b.PRO.017.026 ನೀತಿವಂತನನ್ನು ಶಿಕ್ಷಿಸುವದು ಇಲ್ಲವೆ ಅಕ್ರಮಕ್ಕಾಗಿ ರಾಜಪುತ್ರರನ್ನು ಹೊಡೆಯುವದು ಯುಕ್ತವಲ್ಲ.
17:27b.PRO.017.027 ತಿಳುವಳಿಕೆಯುಳ್ಳ ವನು ಮಿತವಾಗಿ ಮಾತನಾಡುತ್ತಾನೆ; ವಿವೇಕಿಯು ಶ್ರೇಷ್ಠವಾದ ಆತ್ಮವುಳ್ಳವನಾಗಿದ್ದಾನೆ.ಬುದ್ಧಿಹೀನನು ಮೌನವಾಗಿದ್ದರೆ ಜ್ಞಾನಿಯೆಂದು ಎಣಿಸಲ್ಪಡುವನು; ತನ್ನ ತುಟಿಗಳನ್ನು ಬಿಗಿ ಹಿಡಿಯುವವನು ವಿವೇಕಿಯೆಂದು ಅನ್ನಿಸಿಕೊಳ್ಳುವನು.
17:28b.PRO.017.028 ಬುದ್ಧಿಹೀನನು ಮೌನವಾಗಿದ್ದರೆ ಜ್ಞಾನಿಯೆಂದು ಎಣಿಸಲ್ಪಡುವನು; ತನ್ನ ತುಟಿಗಳನ್ನು ಬಿಗಿ ಹಿಡಿಯುವವನು ವಿವೇಕಿಯೆಂದು ಅನ್ನಿಸಿಕೊಳ್ಳುವನು.
18
18:1b.PRO.018.001 ಅಭಿಲಾಷೆಯಿಂದ ಮನುಷ್ಯನು ತನ್ನನ್ನು ಪ್ರತ್ಯೇಕಿಸಿಕೊಂಡವನಾಗಿ ಎಲ್ಲಾ ಜ್ಞಾನ ಕ್ಕಾಗಿ ಹುಡುಕುತ್ತಾ ಕೈಹಾಕುತ್ತಾನೆ.
18:2b.PRO.018.002 ವಿವೇಕದಲ್ಲಿ ಬುದ್ಧಿಹೀನನಿಗೆ ಸಂತೋಷವಿಲ್ಲ; ತನ್ನ ಹೃದಯವನ್ನು ಹೊರಪಡಿಸಿಕೊಳ್ಳುವದೇ ಅವನಿಗೆ ಸಂತೋಷ.
18:3b.PRO.018.003 ದುಷ್ಟನು ಬಂದಾಗ ತಾತ್ಸಾರವೂ ಅವಮಾನದೊಂದಿಗೆ ನಿಂದೆಯೂ ಬರುತ್ತವೆ.
18:4b.PRO.018.004 ಮನುಷ್ಯನ ಬಾಯಿಯ ಮಾತುಗಳು ಆಳವಾದ ನೀರಿನಂತೆಯೂ ಜ್ಞಾನದ ಬುಗ್ಗೆಯು ಹರಿಯುವ ತೊರೆಯಂತೆಯೂ ಇವೆ.
18:5b.PRO.018.005 ನನ್ನ ನ್ಯಾಯತೀರ್ಪಿನಲ್ಲಿ ನೀತಿವಂತರನ್ನು ಕೆಡವುವಂತೆ ದುಷ್ಟ ರನ್ನು ಸ್ವೀಕರಿಸುವದು ಯುಕ್ತವಲ್ಲ.
18:6b.PRO.018.006 ಅವಿವೇಕಿಯ ತುಟಿಗಳು ಕಲಹದಲ್ಲಿ ಸೇರುವದರಿಂದ ಏಟುಗಳನ್ನು ತಿನ್ನುವದಕ್ಕೆ ಅವನ ಬಾಯಿಯು ಕೂಗಿಕೊಳ್ಳುತ್ತದೆ.
18:7b.PRO.018.007 ಬುದ್ಧಿಹೀನನ ಬಾಯಿಯು ಅವನ ನಾಶನ ಮತ್ತು ಅವನ ತುಟಿಗಳು ಪ್ರಾಣಕ್ಕೆ ಪಾಶ.
18:8b.PRO.018.008 ಚಾಡಿಕೋರನ ಮಾತುಗಳು ಗಾಯಗಳಂತೆ ಇದ್ದು ಹೊಟ್ಟೆಯೊಳಗೆ ಇಳಿದುಹೋಗುವವು.
18:9b.PRO.018.009 ಸೋಮಾರಿಯು ತನ್ನ ಕೆಲಸ ದಲ್ಲಿ ಬಹಳವಾಗಿ ಹಾಳುಮಾಡುವವನಿಗೆ ಸಹೋದ ರನು ಆಗಿದ್ದಾನೆ.
18:10b.PRO.018.010 ಕರ್ತನ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುತ್ತಾನೆ.
18:11b.PRO.018.011 ಧನವಂತನ ಐಶ್ವರ್ಯವು ಅವನಿಗೆ ಬಲವಾದ ಪಟ್ಟಣವೂ ತನ್ನ ಅಭಿಪ್ರಾಯ ದಲ್ಲಿ ಎತ್ತರವಾದ ಗೋಡೆಯೂ ಆಗಿದೆ.
18:12b.PRO.018.012 ನಾಶನಕ್ಕೆ ಮುಂದೆ ಮನುಷ್ಯನ ಹೃದಯವು ಗರ್ವವಾಗಿದೆ; ಸನ್ಮಾನಕ್ಕೆ ಮುಂಚೆ ವಿನಯವಾಗಿದೆ.
18:13b.PRO.018.013 ಸಂಗತಿಯನ್ನು ಕೇಳುವದಕ್ಕೆ ಮುಂಚೆ ಉತ್ತರ ಕೊಡುವವರಿಗೆ ಅದು ಅವನಿಗೆ ಮೂರ್ಖತನವೂ ಅವಮಾನವೂ ಆಗಿದೆ.
18:14b.PRO.018.014 ತನ್ನ ಬಲಹೀನತೆಯನ್ನು ಮನುಷ್ಯನ ಆತ್ಮವು ಸಹಿಸುವದು; ಗಾಯಪಟ್ಟ ಆತ್ಮವನ್ನು ಸಹಿಸುವವರು ಯಾರು?
18:15b.PRO.018.015 ವಿವೇಕಿಯ ಹೃದಯವು ತಿಳುವಳಿಕೆಯನ್ನು ಸಂಪಾದಿಸುತ್ತದೆ; ಮತ್ತು ಜ್ಞಾನಿಯ ಕಿವಿಯು ತಿಳುವಳಿಕೆ ಯನ್ನು ಹುಡುಕುತ್ತದೆ.
18:16b.PRO.018.016 ಮನುಷ್ಯನ ದಾನವು ತನಗೆ ಅನುಕೂಲವಾಗಿದ್ದು ದೊಡ್ಡವರ ಸನ್ನಿಧಾನಕ್ಕೆ ಅವನನ್ನು ಕರಕೊಂಡು ಹೋಗುತ್ತದೆ.
18:17b.PRO.018.017 ತನ್ನ ಸಮರ್ಥನೆಯಲ್ಲಿ ಮೊದಲನೆಯವನು ನ್ಯಾಯವಾಗಿದ್ದಾನೆಂದು ತೋರು ತ್ತಾನೆ; ತನ್ನ ನೆರೆಯವನು ಬಂದು ಅವನನ್ನು ಶೋಧಿಸು ತ್ತಾನೆ.
18:18b.PRO.018.018 ಚೀಟು ಕಲಹಗಳನ್ನು ನಿಲ್ಲಿಸಿ ಬಲಿಷ್ಠರನ್ನು ಅಗಲಿಸುತ್ತದೆ;
18:19b.PRO.018.019 ಬಲವಾದ ಪಟ್ಟಣಕ್ಕಿಂತ ಅನ್ಯಾಯ ಹೊಂದಿದ ಸಹೋದರನನ್ನು ಸಂಪಾದಿಸುವದು ಕಷ್ಟ ಕರ. ಅವರ ಕಲಹಗಳು ಅರಮನೆಯ ಸಲಾಕಿಗಳಂತೆ ಇವೆ.
18:20b.PRO.018.020 ತನ್ನ ಬಾಯಿಯ ಫಲದಿಂದ ಮನುಷ್ಯನ ಹೊಟ್ಟೆಯು ತೃಪ್ತಿಹೊಂದುವದು; ತನ್ನ ತುಟಿಗಳ ಆದಾ ಯದಿಂದ ಅವನು ತೃಪ್ತಿಹೊಂದುವನು.
18:21b.PRO.018.021 ನಾಲಿಗೆಯ ವಶದಲ್ಲಿ ಮರಣವೂ ಜೀವವೂ ಇವೆ; ಅದನ್ನು ಪ್ರೀತಿಸುವವರು ಅದರ ಫಲವನ್ನು ತಿನ್ನುವರು.
18:22b.PRO.018.022 ಪತ್ನಿ ಯನ್ನು ದೊರಕಿಸಿಕೊಂಡವನು ಒಳ್ಳೇದನ್ನು ಸಂಪಾದಿಸಿ ದವನಾಗಿ ಕರ್ತನ ದಯೆಯನ್ನು ಹೊಂದುತ್ತಾನೆ.
18:23b.PRO.018.023 ಬಡವನು ವಿಜ್ಞಾಪನೆಗಳನ್ನು ಮಾಡುತ್ತಾನೆ; ಧನಿಕರು ಕಠಿಣವಾಗಿ ಉತ್ತರಕೊಡು ತ್ತಾರೆ.ಸ್ನೇಹಿತರಿದ್ದವನು ಸ್ನೇಹವಾಗಿ ನಡೆದುಕೊಳ್ಳಬೇಕು. ಸಹೋದರನಿಗಿಂತ ಹತ್ತಿರ ಹೊಂದಿಕೊಳ್ಳುವ ಸ್ನೇಹಿತನಿದ್ದಾನೆ.
18:24b.PRO.018.024 ಸ್ನೇಹಿತರಿದ್ದವನು ಸ್ನೇಹವಾಗಿ ನಡೆದುಕೊಳ್ಳಬೇಕು. ಸಹೋದರನಿಗಿಂತ ಹತ್ತಿರ ಹೊಂದಿಕೊಳ್ಳುವ ಸ್ನೇಹಿತನಿದ್ದಾನೆ.
19
19:1b.PRO.019.001 ತನ್ನ ನಿರ್ದೋಷತ್ವದಲ್ಲಿ ನಡೆಯುವ ಬಡವನು ತನ್ನ ತುಟಿಗಳಲ್ಲಿ ವಕ್ರತೆಯುಳ್ಳ ಬುದ್ಧಿಹೀನನಿಗಿಂತಲೂ ಉತ್ತಮ.
19:2b.PRO.019.002 ತಿಳುವಳಿಕೆಯಿಲ್ಲದ ಪ್ರಾಣವು ಯುಕ್ತವಲ್ಲ; ತನ್ನ ಪಾದಗಳಿಂದ ದುಡುಕುವ ವನು ಪಾಪಮಾಡುತ್ತಾನೆ.
19:3b.PRO.019.003 ಮನುಷ್ಯನ ಬುದ್ಧಿಹೀನತೆ ತನ್ನ ದಾರಿಯನ್ನು ತಪ್ಪಿಸುತ್ತದೆ; ಅವನ ಹೃದಯವು ಕರ್ತನಿಗೆ ವಿರೋಧವಾಗಿ ಉರಿಗೊಳ್ಳುತ್ತದೆ.
19:4b.PRO.019.004 ಐಶ್ವ ರ್ಯವು ಅನೇಕ ಮಂದಿ ಸ್ನೇಹಿತರನ್ನು ಮಾಡಿಕೊಳ್ಳು ತ್ತದೆ; ಬಡವನು ತನ್ನ ನೆರೆಯವನಿಂದ ಪ್ರತ್ಯೇಕಿಸಲ್ಪ ಡುತ್ತಾನೆ.
19:5b.PRO.019.005 ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವದಿಲ್ಲ; ಸುಳ್ಳಾಡುವವನು ತಪ್ಪಿಸಿಕೊಳ್ಳದೆ ಇರನು.
19:6b.PRO.019.006 ಅಧಿಪ ತಿಯ ದಯೆಗಾಗಿ ಅನೇಕರು ಬಿನ್ನವಿಸುವರು; ದಾನಗ ಳನ್ನು ಕೊಡುವವನಿಗೆ ಪ್ರತಿಯೊಬ್ಬನೂ ಸ್ನೇಹಿತನೇ.
19:7b.PRO.019.007 ಬಡವನ ಸಹೋದರರೆಲ್ಲಾ ಅವನನ್ನು ಹಗೆಮಾಡು ತ್ತಾರೆ. ತನ್ನ ಸ್ನೇಹಿತರು ತನ್ನಿಂದ ಎಷ್ಟೋ ಹೆಚ್ಚಾಗಿ ದೂರ ಹೋಗುತ್ತಾರಲ್ಲವೇ? ಮಾತುಗಳಿಂದ ಅವನು ಹಿಂಬಾಲಿಸಿದರೂ ಅವು ಅವನಿಗೆ ಸಾಲುವದಿಲ್ಲ.
19:8b.PRO.019.008 ಜ್ಞಾನವನ್ನು ಸಂಪಾದಿಸಿಕೊಳ್ಳುವವನು ತನ್ನ ಪ್ರಾಣ ವನ್ನು ಪ್ರೀತಿಸುತ್ತಾನೆ; ವಿವೇಕವನ್ನು ಕೈಕೊಳ್ಳುವವನು ಒಳ್ಳೇದನ್ನು ಕಂಡುಕೊಳ್ಳುವನು.
19:9b.PRO.019.009 ಸುಳ್ಳು ಸಾಕ್ಷಿಯು ಶಿಕ್ಷಿಸಲ್ಪಡದೆ ಇರುವದಿಲ್ಲ; ಸುಳ್ಳಾಡುವವನು ನಾಶವಾ ಗುವನು.
19:10b.PRO.019.010 ಬುದ್ಧಿಹೀನನಿಗೆ ಆನಂದವು ಯುಕ್ತವಲ್ಲ; ಅಧಿಪತಿಗಳ ಮೇಲೆ ದೊರೆತನ ಮಾಡುವದು ಸೇವಕ ನಿಗೆ ಯುಕ್ತವೇ ಅಲ್ಲ.
19:11b.PRO.019.011 ಮನುಷ್ಯನ ವಿವೇಕವು ಅವನ ಕೋಪವನ್ನು ಅಡ್ಡಿಮಾಡುತ್ತದೆ. ದೋಷವನ್ನು ಲಕ್ಷಿ ಸದೆ ಇರುವದು ಅವನಿಗೆ ಘನತೆಯಾಗಿದೆ.
19:12b.PRO.019.012 ಅರಸನ ಕೋಪವು ಸಿಂಹದ ಘರ್ಜನೆಯಂತಿದೆ; ಅವನ ದಯೆಯು ಹುಲ್ಲಿನ ಮೇಲಿರುವ ಇಬ್ಬನಿಯಂತಿದೆ.
19:13b.PRO.019.013 ಬುದ್ಧಿಹೀನನಾದ ಮಗನು ತನ್ನ ತಂದೆಗೆ ಹಾನಿಕ ರನು; ಹೆಂಡತಿಯ ಕಲಹಗಳು ಯಾವಾಗಲೂ ತೊಟ್ಟಿ ಕ್ಕುವ ಹನಿಗಳು.
19:14b.PRO.019.014 ಮನೆಯೂ ಐಶ್ವರ್ಯವೂ ಪಿತೃಗಳ ಸ್ವಾಸ್ಥ್ಯವು; ವಿವೇಕಿಯಾದ ಹೆಂಡತಿಯು ಕರ್ತ ನಿಂದಲೇ.
19:15b.PRO.019.015 ಮೈಗಳ್ಳತನವು ಗಾಢ ನಿದ್ರೆಯಲ್ಲಿ ಮುಳು ಗಿಸುತ್ತದೆ; ಸೋಮಾರಿಯ ಪ್ರಾಣವು ಹಸಿವೆಗೊಳ್ಳು ವದು.
19:16b.PRO.019.016 ಆಜ್ಞೆಯನ್ನು ಪಾಲಿಸುವವನು ತನ್ನ ಆತ್ಮವನ್ನು ಪಾಲಿಸುತ್ತಾನೆ; ತನ್ನ ಮಾರ್ಗಗಳನ್ನು ಅಸಡ್ಡೆಮಾಡು ವವನು ಸಾಯುವನು.
19:17b.PRO.019.017 ಬಡವರಿಗೆ ದಯೆತೋರಿಸು ವವನು. ಕರ್ತನಿಗೆ ಸಾಲ ಕೊಡುತ್ತಾನೆ; ಅವನು ಕೊಟ್ಟದ್ದನ್ನು ಆತನು ತಿರುಗಿ ಅವನಿಗೆ ಕೊಡುತ್ತಾನೆ.
19:18b.PRO.019.018 ಇನ್ನೂ ನಿರೀಕ್ಷೆ ಇರುವಾಗಲೇ ನಿನ್ನ ಮಗನನ್ನು ಶಿಕ್ಷಿಸು; ಅವನ ಅಳುವಿಕೆಗೆ ನೀನು ಕನಿಕರಿಸದೆ ಇರು.
19:19b.PRO.019.019 ಮಹಾಕೋಪಿಷ್ಠನು ಶಿಕ್ಷೆಯನ್ನು ಅನುಭವಿಸುವನು; ಅವನನ್ನು ನೀನು ಬಿಡಿಸಿದರೆ ತಿರುಗಿ ನೀನು ಅದನ್ನು ಮಾಡಬೇಕಾಗುತ್ತದೆ.
19:20b.PRO.019.020 ಆಲೋಚನೆಯನ್ನು ಕೇಳಿ ಶಿಕ್ಷಣವನ್ನು ಅಂಗೀಕರಿಸು. ಕಡೆಯಲ್ಲಿ ನೀನು ಜ್ಞಾನಿ ಯಾಗುವಿ.
19:21b.PRO.019.021 ಮನುಷ್ಯನ ಹೃದಯದಲ್ಲಿ ಅನೇಕ ಕಲ್ಪನೆಗಳಿವೆ; ಆದರೂ ಕರ್ತನ ಸಂಕಲ್ಪವೇ ಈಡೇರು ವದು.
19:22b.PRO.019.022 ಮನುಷ್ಯನ ಆಕಾಂಕ್ಷೆಯು ಆತನ ದಯೆಯೇ; ಬಡವನು ಸುಳ್ಳುಗಾರನಿಗಿಂತ ಒಳ್ಳೆಯವನು.
19:23b.PRO.019.023 ಕರ್ತನ ಭಯವು ಜೀವಕ್ಕೆ ಒಲಿಯುತ್ತದೆ; ಅದನ್ನು ಹೊಂದಿದ ವನು ತೃಪ್ತನಾಗಿ ನೆಲೆಗೊಳ್ಳುವನು; ಅವನಿಗೆ ಕೇಡು ಸಂಭವಿಸುವದಿಲ್ಲ.
19:24b.PRO.019.024 ಸೋಮಾರಿಯು ತನ್ನ ಕೈಯನ್ನು ಎದೆಯಲ್ಲಿ ಬಚ್ಚಿಟ್ಟು ತನ್ನ ಬಾಯಿಗೆ ಸಹ ಅದನ್ನು ಎತ್ತುವದಿಲ್ಲ.
19:25b.PRO.019.025 ಪರಿಹಾಸ್ಯಗಾರರನ್ನು ಹೊಡೆದರೆ ಮೂಢರು ಎಚ್ಚರಗೊಳ್ಳುವರು; ವಿವೇಕಿಯನ್ನು ಗದರಿಸಿ ದರೆ ಅವನು ತಿಳುವಳಿಕೆಯನ್ನು ಗ್ರಹಿಸುವನು.
19:26b.PRO.019.026 ತಂದೆಯನ್ನು ನಷ್ಟಪಡಿಸಿ ತಾಯಿಯನ್ನು ಓಡಿಸುವವನು ನಾಚಿಕೆಯನ್ನುಂಟು ಮಾಡಿ ನಿಂದೆಯನ್ನು ತರುತ್ತಾನೆ.
19:27b.PRO.019.027 ನನ್ನ ಮಗನೇ, ತಿಳುವಳಿಕೆಯ ಮಾತುಗಳಿಂದ ದಾರಿ ತಪ್ಪಿಸುವ ಬೋಧನೆಯನ್ನು ಕೇಳದಿರು.
19:28b.PRO.019.028 ಭಕ್ತಿಹೀ ನನ ಸಾಕ್ಷಿಯು ನ್ಯಾಯತೀರ್ಪನ್ನು ಗೇಲಿಮಾಡುತ್ತವೆ. ದುಷ್ಟನ ಬಾಯಿಯು ದ್ರೋಹವನ್ನು ನುಂಗುವದು.ಪರಿಹಾಸ್ಯಗಾರರಿಗೆ ನ್ಯಾಯತೀರ್ಪುಗಳೂ ಬುದ್ಧಿ ಹೀನರ ಬೆನ್ನಿಗೆ ಪೆಟ್ಟುಗಳೂ ಸಿದ್ಧವಾಗಿವೆ.
19:29b.PRO.019.029 ಪರಿಹಾಸ್ಯಗಾರರಿಗೆ ನ್ಯಾಯತೀರ್ಪುಗಳೂ ಬುದ್ಧಿ ಹೀನರ ಬೆನ್ನಿಗೆ ಪೆಟ್ಟುಗಳೂ ಸಿದ್ಧವಾಗಿವೆ.
20
20:1b.PRO.020.001 ದ್ರಾಕ್ಷಾರಸವು ಪರಿಹಾಸ್ಯಕರವಾಗಿದೆ; ಮಾದಕ ಮದ್ಯವು ಉದ್ರೇಕಿಸುತ್ತದೆ. ಇದ ರಿಂದ ಮೋಸಹೋದವನು ಜ್ಞಾನಿಯಲ್ಲ.
20:2b.PRO.020.002 ಅರಸನ ಭಯವು ಸಿಂಹದ ಗರ್ಜನೆಯಂತಿದೆ; ಅವನಿಗೆ ಕೋಪ ವನ್ನೆಬ್ಬಿಸುವವನು ತನ್ನ ಪ್ರಾಣಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ.
20:3b.PRO.020.003 ಕಲಹವನ್ನು ತಡೆಯುವವನು ಮಾನಕ್ಕೆ ಯೋಗ್ಯನು; ಪ್ರತಿಯೊಬ್ಬ ಬುದ್ಧಿಹೀನನು ತಲೆಹಾಕು ತ್ತಾನೆ.
20:4b.PRO.020.004 ಮೈಗಳ್ಳನು ಚಳಿಯ ನಿಮಿತ್ತವಾಗಿ ಉಳುವದಿಲ್ಲ; ಆದಕಾರಣ ಸುಗ್ಗಿಯಲ್ಲಿ ಅವನು ಬೇಡಿಕೊಂಡರೂ ಏನೂ ಸಿಕ್ಕುವದಿಲ್ಲ.
20:5b.PRO.020.005 ಮನುಷ್ಯನ ಹೃದಯದ ಆಲೋ ಚನೆಯು ಆಳವಾದ (ಬಾವಿಯ) ನೀರಿನಂತಿದೆ; ವಿವೇ ಕಿಯು ಅದನ್ನು ಸೇದುವನು.
20:6b.PRO.020.006 ಅನೇಕರಲ್ಲಿ ಪ್ರತಿಯೊ ಬ್ಬನು ತಮ್ಮ ಸ್ವಂತ ಸೌಜನ್ಯವನ್ನು ಸಾರುವನು; ನಂಬಿ ಗಸ್ತನಾದ ಮನುಷ್ಯನನ್ನು ಯಾರು ಕಂಡುಕೊಳ್ಳಬಲ್ಲರು?
20:7b.PRO.020.007 ನೀತಿವಂತನು ತನ್ನ ಯಥಾರ್ಥತೆಯಲ್ಲಿ ನಡೆಯುತ್ತಾನೆ; ಅವನು ಗತಿಸಿದ ಮೇಲೆ ಅವನ ಮಕ್ಕಳು ಆಶೀರ್ವದಿ ಸಲ್ಪಡುವರು.
20:8b.PRO.020.008 ನ್ಯಾಯತೀರ್ಪಿನ ಸಿಂಹಾಸನದ ಮೇಲೆ ಕೂತಿರುವ ಅರಸನು ತನ್ನ ಕಣ್ಣು ದೃಷ್ಟಿಯಿಂದ ಸಕಲ ಕೆಟ್ಟತನವನ್ನು ಚದರಿಸುವನು.
20:9b.PRO.020.009 ನನ್ನ ಹೃದಯವನ್ನು ಶುದ್ಧಿಮಾಡಿಕೊಂಡಿದ್ದೇನೆ, ನನ್ನ ಪಾಪದಿಂದ ನಾನು ಶುದ್ಧನು ಎಂದು ಯಾರು ಹೇಳಬಲ್ಲರು?
20:10b.PRO.020.010 ವಿಧ ವಿಧವಾದ ತೂಕಗಳೂ ತರತರವಾದ ಅಳತೆಗಳೂ ಇವೆರಡೂ ಸಮವಾಗಿಯೇ ಕರ್ತನಿಗೆ ಅಸಹ್ಯ.
20:11b.PRO.020.011 ತನ್ನ ಕೆಲಸವು ಶುದ್ಧವೋ ಇಲ್ಲವೆ ನ್ಯಾಯವೋ ಎಂಬದು ತನ್ನ ಕ್ರಿಯೆಗಳಿಂದಲೇ ಹುಡುಗನು ತೋರ್ಪಡಿಸಿ ಕೊಳ್ಳುತ್ತಾನೆ.
20:12b.PRO.020.012 ಕೇಳುವ ಕಿವಿ ನೋಡುವ ಕಣ್ಣು, ಇವೆರಡನ್ನು ಕರ್ತನು ಮಾಡಿದ್ದಾನೆ.
20:13b.PRO.020.013 ನೀನು ಬಡ ತನಕ್ಕೆ ಬಾರದಂತೆ ನಿದ್ರೆಯಲ್ಲಿ ಆಸಕ್ತಿಯುಳ್ಳವನಾಗಿರ ಬೇಡ; ನಿನ್ನ ಕಣ್ಣುಗಳನ್ನು ತೆರೆದರೆ ನೀನು ರೊಟ್ಟಿ ಯಿಂದ ತೃಪ್ತನಾಗುವಿ.
20:14b.PRO.020.014 ಇದು ನಿಷ್ಪ್ರಯೋಜಕವಾದದ್ದು, ಇದು ನಿಷ್ಪ್ರಯೋಜಕವಾದದ್ದು ಎಂದು ಕೊಳ್ಳು ವವನು ಹೇಳುತ್ತಾನೆ. ಅವನು ಹೋದ ಮೇಲೆ ಹೊಗ ಳುತ್ತಾನೆ.
20:15b.PRO.020.015 ಬಂಗಾರವೂ ಮಾಣಿಕ್ಯಗಳ ರಾಶಿಯೂ ಇವೆ. ತಿಳುವಳಿಕೆಯ ತುಟಿಗಳು ಅಮೂಲ್ಯವಾದ ರತ್ನ ವಾಗಿವೆ.
20:16b.PRO.020.016 ಪರರ ಹೊಣೆಯಾಗಿರುವ ಬಟ್ಟೆಯನ್ನು ತೆಗೆದುಕೋ; ಪರಸ್ತ್ರೀಗೋಸ್ಕರ ಅವನಿಂದ ಒತ್ತೆ ತೆಗೆ ದುಕೋ.
20:17b.PRO.020.017 ಮೋಸದಿಂದ ಸಿಕ್ಕಿದ ರೊಟ್ಟಿಯು ಮನು ಷ್ಯನಿಗೆ ರುಚಿ; ಆಮೇಲೆ ಅವನ ಬಾಯಿಯು ಮರಳಿ ನಿಂದ ತುಂಬುವದು.
20:18b.PRO.020.018 ಪ್ರತಿಯೊಂದು ಉದ್ದೇಶವು ಆಲೋಚನೆಯಿಂದ ಸಫಲವಾಗುವದು; ಹಿತವಾದ ಸಲಹೆಯಿಂದ ಯುದ್ಧಮಾಡು.
20:19b.PRO.020.019 ತಿರುಗುವ ಚಾಡಿ ಕೋರನು ಗುಟ್ಟುಗಳನ್ನು ರಟ್ಟುಮಾಡುತ್ತಾನೆ. ಆದ ಕಾರಣ ತನ್ನ ತುಟಿಗಳಿಂದ ಮುಖಸ್ತುತಿ ಮಾಡುವವನ ಗೊಡವೆಗೆ ಹೋಗಬೇಡ.
20:20b.PRO.020.020 ತನ್ನ ತಂದೆ ತಾಯಿಯನ್ನಾ ಗಲಿ ಶಪಿಸುವವನ ದೀಪವು ಮಂಕಾದ ಕತ್ತಲೆಯಲ್ಲಿ ಆರಿಹೋಗುವದು.
20:21b.PRO.020.021 ಮೊದಲು ಸ್ವಾಸ್ತ್ಯವನ್ನೂ ತ್ವರೆ ಯಾಗಿ ಹೊಂದಬಹುದು; ಅದರ ಕೊನೆಯು ಆಶೀ ರ್ವದಿಸಲ್ಪಡುವದಿಲ್ಲ.
20:22b.PRO.020.022 ನೀನು--ಕೇಡಿಗೆ ಮುಯ್ಯಿ ತೀರಿಸುವೆನು ಅನ್ನಬೇಡ; ಕರ್ತನನ್ನು ನಿರೀಕ್ಷಿಸು; ಆಗ ಆತನು ನಿನ್ನನ್ನು ರಕ್ಷಿಸುವನು.
20:23b.PRO.020.023 ವಿಧವಿಧವಾದ ತೂಕ ಗಳು ಕರ್ತನಿಗೆ ಅಸಹ್ಯವಾಗಿವೆ; ಮೋಸದ ತಕ್ಕಡಿಯು ಒಳ್ಳೇದಲ್ಲ.
20:24b.PRO.020.024 ಮನುಷ್ಯನ ನಡೆಗಳು ಕರ್ತನಿಂದಲೇ; ಹಾಗಾದರೆ ಒಬ್ಬ ಮನುಷ್ಯನು ತನ್ನ ಮಾರ್ಗವನ್ನು ಹೇಗೆ ತಿಳುಕೊಳ್ಳಬಲ್ಲನು?
20:25b.PRO.020.025 ಪರಿಶುದ್ಧವಾದದ್ದನ್ನು ನುಂಗಿದವನಾಗಿ ತರುವಾಯ ವಿಚಾರಿಸುವದಕ್ಕಾಗಿ ಆಣೆಯಿಟ್ಟು ಕೊಳ್ಳುವದು ಒಬ್ಬ ಮನುಷ್ಯನಿಗೆ ಉರ್ಲಾ ಗಿದೆ.
20:26b.PRO.020.026 ಜ್ಞಾನಿಯಾದ ಅರಸನು ದುಷ್ಟರನ್ನು ಚದರಿಸಿ ಅವರ ಮೇಲೆ ಚಕ್ರವನ್ನು ಎಳೆಯುತ್ತಾನೆ.
20:27b.PRO.020.027 ಮನುಷ್ಯನ ಆತ್ಮವು ಹೊಟ್ಟೆಯ ಒಳಭಾಗಗಳನ್ನು ಶೋಧಿಸುವಂಥ ಕರ್ತನ ದೀಪವಾಗಿವೆ.
20:28b.PRO.020.028 ಕರುಣೆಯೂ ಸತ್ಯವೂ ಅರಸನನ್ನು ಕಾಯುತ್ತದೆ; ಕರುಣೆಯಿಂದಲೇ ಅವನ ಸಿಂಹಾಸನವು ಸ್ಥಿರಗೊಳ್ಳುತ್ತದೆ.
20:29b.PRO.020.029 ಯೌವನಸ್ಥರ ಘನತೆಯು ಅವರ ಬಲವೇ; ಮುದುಕರ ಅಲಂಕಾರವು ನರೆತ ತಲೆಯೇ.ನೀಲಿಯಾದ ಗಾಯವು ದುಷ್ಟ ತ್ವವನ್ನು ತೊಳೆಯುತ್ತದೆ; ಹಾಗೆಯೇ ಏಟುಗಳು ಹೊಟ್ಟೆಯ ಒಳಭಾಗಗಳನ್ನು ಶುದ್ಧಮಾಡುತ್ತವೆ.
20:30b.PRO.020.030 ನೀಲಿಯಾದ ಗಾಯವು ದುಷ್ಟ ತ್ವವನ್ನು ತೊಳೆಯುತ್ತದೆ; ಹಾಗೆಯೇ ಏಟುಗಳು ಹೊಟ್ಟೆಯ ಒಳಭಾಗಗಳನ್ನು ಶುದ್ಧಮಾಡುತ್ತವೆ.
21
21:1b.PRO.021.001 ನೀರಿನ ನದಿಗಳಂತೆ ಅರಸನ ಹೃದಯವು ಕರ್ತನ ಕೈಯಲ್ಲಿದೆ; ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ.
21:2b.PRO.021.002 ತನ್ನ ದೃಷ್ಟಿ ಯಲ್ಲಿ ಮನುಷ್ಯನ ಪ್ರತಿಯೊಂದು ಮಾರ್ಗವು ಸರಿ ಯಾಗಿದೆ; ಕರ್ತನು ಹೃದಯಗಳನ್ನು ಪರೀಕ್ಷಿಸುತ್ತಾನೆ.
21:3b.PRO.021.003 ಯಜ್ಞಕ್ಕಿಂತ ನೀತಿನ್ಯಾಯಗಳನ್ನು ನಡಿಸುವದು ಕರ್ತ ನಿಗೆ ಎಷ್ಟೋ ಮೆಚ್ಚಿಕೆಯಾಗಿದೆ.
21:4b.PRO.021.004 ಹೆಮ್ಮೆಯ ದೃಷ್ಟಿ, ಗರ್ವದ ಹೃದಯ, ದುಷ್ಟರ ಉಳುವಿಕೆ ಪಾಪವೇ.
21:5b.PRO.021.005 ಶ್ರದ್ಧೆಯುಳ್ಳ ಯೋಚನೆಗಳು ಸಮ್ಮದ್ಧಿಗೆ ಒಲಿಯುತ್ತವೆ; ಆತುರಪಡುವ ಪ್ರತಿಯೊಬ್ಬನ ಯೋಚನೆಗಳು ಕೊರ ತೆಗೆ ಉಳಿಯುತ್ತವೆ.
21:6b.PRO.021.006 ಸುಳ್ಳಿನ ನಾಲಿಗೆಯಿಂದ ಸಂಪಾ ದಿಸುವ ಸಂಪತ್ತು ಮೃತ್ಯುವನ್ನು ಹುಡುಕುವವರಿಂದ ಬಡಿಯಲ್ಪಟ್ಟ ವ್ಯರ್ಥತ್ವವಾಗಿದೆ.
21:7b.PRO.021.007 ದುಷ್ಟರ ಸೂರೆಯು ಅವರನ್ನು ನಾಶಪಡಿಸುವದು; ನ್ಯಾಯವಾದದ್ದನ್ನು ಮಾಡುವದನ್ನು ಅವರು ನಿರಾಕರಿಸುತ್ತಾರೆ.
21:8b.PRO.021.008 ಮನುಷ್ಯನ ಮಾರ್ಗವು ಡೊಂಕು ಮತ್ತು ಅಪರಿಚಿತ; ಪವಿತ್ರನಿ ಗಾದರೋ ಅವನ ಕ್ರಿಯೆಯು ಸರಳ.
21:9b.PRO.021.009 ವಿಶಾಲವಾದ ಮನೆಯಲ್ಲಿ ಜಗಳಗಂಟಿಯೊಂದಿಗೆ ಇರುವದಕ್ಕಿಂತ ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವದು ಲೇಸು.
21:10b.PRO.021.010 ದುಷ್ಟರ ಮನಸ್ಸು ಕೇಡನ್ನು ಅಪೇಕ್ಷಿಸುತ್ತದೆ; ಅವನ ದೃಷ್ಟಿಯಲ್ಲಿ ತನ್ನ ನೆರೆಯವನು ಯಾವ ದಯೆ ಯನ್ನು ಕಂಡುಕೊಳ್ಳುವದಿಲ್ಲ.
21:11b.PRO.021.011 ಪರಿಹಾಸ್ಯಕರನ್ನು ಶಿಕ್ಷಿಸಿ ದರೆ ಬುದ್ಧಿಹೀನರು ಜ್ಞಾನವಂತರಾಗುವರು; ಜ್ಞಾನಿಯು ಶಿಕ್ಷಣ ಹೊಂದಿದರೆ ಅವನು ತಿಳುವಳಿಕೆಯನ್ನು ಹೊಂದು ತ್ತಾನೆ.
21:12b.PRO.021.012 ನೀತಿವಂತನು ದುಷ್ಟನ ಮನೆಯನ್ನು ಬುದ್ಧಿ ಯಿಂದ ಲಕ್ಷಿಸುತ್ತಾನೆ; ಅವರ ದುಷ್ಟತನಕ್ಕಾಗಿ ದೇವರು ಅವರನ್ನು ಕೆಡವುತ್ತಾನೆ.
21:13b.PRO.021.013 ಬಡವರ ಕೂಗಿಗೆ ತನ್ನ ಕಿವಿಗಳನ್ನು ಮುಚ್ಚಿಕೊಳ್ಳುವವನು ತಾನು ಕೂಗಿದಾಗ ಯಾರೂ ಅವನಿಗೆ ಉತ್ತರಕೊಡುವದಿಲ್ಲ.
21:14b.PRO.021.014 ಗುಪ್ತ ಲಂಚವು ಕೋಪವನ್ನು ಅಡಗಿಸುವದು; ಎದೆಯಲ್ಲಿ ಕೊಟ್ಟ ಬಹುಮಾನವು ರೌದ್ರವನ್ನು ಆರಿಸುತ್ತದೆ.
21:15b.PRO.021.015 ನ್ಯಾಯತೀರಿಸುವದು ನೀತಿವಂತರಿಗೆ ಸಂತೋಷವಾ ಗಿದೆ; ಅಕ್ರಮವನ್ನು ಮಾಡುವವರಿಗೆ ನಾಶನ.
21:16b.PRO.021.016 ವಿವೇ ಕದ ಮಾರ್ಗವನ್ನು ಬಿಟ್ಟು, ತಿರುಗುವವನು ಸತ್ತವರ ಕೂಟದಲ್ಲಿ ಇರುವಂಥವನಾಗಿದ್ದಾನೆ.
21:17b.PRO.021.017 ಭೋಗಾಸ ಕ್ತನು ಕೊರತೆಪಡುವನು; ದ್ರಾಕ್ಷಾರಸವನ್ನೂ ತೈಲವನ್ನೂ ಅಪೇಕ್ಷಿಸುವವನು ನಿರ್ಭಾಗ್ಯನಾಗುವನು.
21:18b.PRO.021.018 ನೀತಿ ವಂತರಿಗಾಗಿ ದುಷ್ಟರೂ ಯಥಾರ್ಥವಂತರಿಗಾಗಿ ದೋಷಕರೂ ಈಡಾಗುವರು.
21:19b.PRO.021.019 ಕಾಡುವ ಕೋಪವುಳ್ಳ ಸ್ತ್ರೀಯೊಂದಿಗೆ ವಾಸಮಾಡುವದಕ್ಕಿಂತ ಅಡವಿಯಲ್ಲಿ ವಾಸಿಸುವದು ಲೇಸು.
21:20b.PRO.021.020 ಜ್ಞಾನವಂತರ ನಿವಾಸದಲ್ಲಿ ಅಪೇಕ್ಷಿಸತಕ್ಕ ಐಶ್ವರ್ಯವೂ ಎಣ್ಣೆಯೂ ಇರುತ್ತವೆ; ಬುದ್ಧಿಹೀನನು ಇದ್ದದ್ದನ್ನು ಖರ್ಚು ಮಾಡುತ್ತಾನೆ.
21:21b.PRO.021.021 ನೀತಿಯನ್ನೂ ಕರುಣೆಯನ್ನೂ ಹಿಂಬಾಲಿಸುವವನು; ಜೀವವನ್ನೂ ನೀತಿಯನ್ನೂ ಕೀರ್ತಿಯನ್ನೂ ಕಂಡು ಕೊಳ್ಳುತ್ತಾನೆ.
21:22b.PRO.021.022 ಜ್ಞಾನಿಯು ಬಲಿಷ್ಠರ ಪಟ್ಟಣವನ್ನು ಹತ್ತಿ ಅದರಲ್ಲಿ ಭರವಸವಿಟ್ಟು ಬಲವನ್ನು ಕೆಡವಿ ಹಾಕು ತ್ತಾನೆ.
21:23b.PRO.021.023 ತನ್ನ ಬಾಯಿಯನ್ನು ನಾಲಿಗೆಯನ್ನು ಕಾಯುವ ವನು ಇಕ್ಕಟ್ಟುಗಳಿಂದ ತನ್ನ ಪ್ರಾಣವನ್ನು ಕಾಪಾಡಿ ಕೊಳ್ಳುತ್ತಾನೆ.
21:24b.PRO.021.024 ಸೊಕ್ಕೇರಿದ ಗರ್ವದಲ್ಲಿ ವರ್ತಿಸುವ ವನ ಹೆಸರು ಅಹಂಕಾರಿ ಮತ್ತು ಪರಿಹಾಸ್ಯಕನು.
21:25b.PRO.021.025 ಸೋಮಾರಿಯ ಆಶೆಯು ಅವನನ್ನು ಕೊಲ್ಲುತ್ತವೆ. ಅವನ ಕೈಗಳು ದುಡಿಯುವದಕ್ಕೆ ನಿರಾಕರಿಸುತ್ತವೆ.
21:26b.PRO.021.026 ದಿನವೆಲ್ಲಾ ಅವನು ದುರಾಶೆಯಿಂದ ಆಶಿಸುತ್ತಾನೆ; ಆದರೆ ನೀತಿವಂತನು ಹಿಂತೆಗೆಯದೇ ಕೊಡುತ್ತಾನೆ.
21:27b.PRO.021.027 ದುಷ್ಟರ ಯಜ್ಞವು ಅಸಹ್ಯ; ಹೀಗಾದರೆ ದುರ್ಬುದ್ಧಿ ಯಿಂದ ಅದನ್ನು ಅರ್ಪಿಸಿದರೆ ಇನ್ನೂ ಎಷ್ಟೋ ಅಸಹ್ಯ ಕರವಾಗಿದೆ.
21:28b.PRO.021.028 ಸುಳ್ಳುಸಾಕ್ಷಿಯವನು ನಾಶವಾಗುವನು; ಕೇಳುವವನು ಬಿಡದೆ ಮಾತಾಡುವನು.
21:29b.PRO.021.029 ದುಷ್ಟನು ತನ್ನ ಮುಖವನ್ನು ಕಠಿಣಮಾಡಿಕೊಳ್ಳುತ್ತಾನೆ; ಯಥಾ ರ್ಥವಂತನಾದರೋ ತನ್ನ ಮಾರ್ಗವನ್ನು ಸರಿಪಡಿಸಿ ಕೊಳ್ಳುತ್ತಾನೆ.
21:30b.PRO.021.030 ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
21:31b.PRO.021.031 ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
22
22:1b.PRO.022.001 ಬಹು ಐಶ್ವರ್ಯಕ್ಕಿಂತಲೂ ಒಳ್ಳೆಯ ಹೆಸರನ್ನೂ ಬೆಳ್ಳಿ ಬಂಗಾರಕ್ಕಿಂತ ಪ್ರೀತಿಯ ದಯವನ್ನೂ ಆರಿಸಿಕೊಳ್ಳುವದು ಉತ್ತಮ.
22:2b.PRO.022.002 ಧನಿಕರು, ಬಡವರು ಒಟ್ಟಾಗಿ ಸಂಧಿಸುತ್ತಾರೆ; ಅವರೆಲ್ಲರನ್ನು ಸೃಷ್ಟಿಸಿದಾತನು ಕರ್ತನೇ.
22:3b.PRO.022.003 ಜಾಣನು ಕೇಡನ್ನು ಮುಂದಾಗಿ ನೋಡಿ ಅಡಗಿಕೊಳ್ಳುತ್ತಾನೆ; ಬುದ್ಧಿಹೀನರು ಮುಂದೆ ಹೋಗಿ ಶಿಕ್ಷೆಯನ್ನು ಹೊಂದುತ್ತಾರೆ.
22:4b.PRO.022.004 ಐಶ್ವ ರ್ಯವೂ ಮಾನವೂ ಜೀವವೂ ವಿನಯ ಕರ್ತನ ಭಯದಿಂದಲೇ.
22:5b.PRO.022.005 ಮೂಢರ ದಾರಿಯಲ್ಲಿ ಮುಳ್ಳು ಗಳೂ ಉರುಲುಗಳೂ ಇವೆ; ತನ್ನ ಪ್ರಾಣವನ್ನು ಕಾಪಾ ಡಿಕೊಳ್ಳುವವನು ಅವುಗಳಿಂದ ದೂರವಾಗಿರುವನು.
22:6b.PRO.022.006 ನಡೆಯಬೇಕಾದ ಮಾರ್ಗದಲ್ಲಿರುವಂತೆ ಹುಡುಗನಿಗೆ ಶಿಕ್ಷಣಕೊಡು; ಆಗ ಮುಪ್ಪಿನಲ್ಲಿಯೂ ಅವನು ಅದ ರಿಂದ ಹೊರಟು ಹೋಗುವದಿಲ್ಲ.
22:7b.PRO.022.007 ಐಶ್ವರ್ಯವಂತನು ಬಡವನ ಮೇಲೆ ಆಳುತ್ತಾನೆ. ಸಾಲಗಾರನು ಸಾಲಕೊಟ್ಟ ವನಿಗೆ ಸೇವಕನು.
22:8b.PRO.022.008 ಕೆಟ್ಟತನವನ್ನು ಬಿತ್ತುವವನು ವ್ಯರ್ಥ ವನ್ನು ಕೊಯ್ಯುವನು; ಅವನ ಕೋಪದ ದಂಡವು ಬಿದ್ದುಹೋಗುವದು.
22:9b.PRO.022.009 ದಯಾದೃಷ್ಟಿಯುಳ್ಳವನು ಆಶೀ ರ್ವಾದವನ್ನು ಹೊಂದುವನು; ತನಗಿದ್ದ ಆಹಾರದಲ್ಲಿ ಬಡವರಿಗೆ ಕೊಡುತ್ತಾನೆ.
22:10b.PRO.022.010 ಪರಿಹಾಸ್ಯ ಮಾಡುವವ ನನ್ನು ಹೊರಗೆ ತಳ್ಳಿಬಿಟ್ಟರೆ ಕಲಹವು ನಿಲ್ಲುವದು; ಹೌದು, ವಿವಾದವೂ ನಿಂದೆಯೂ ನಿಂತುಹೋಗು ವವು.
22:11b.PRO.022.011 ಹೃದಯ ಶುದ್ಧಿಯನ್ನು ಪ್ರೀತಿಸುವವನಿಗೆ ತನ್ನ ತುಟಿಗಳ ಕೃಪೆಗಾಗಿ ಅರಸನು ಅವನಿಗೆ ಸ್ನೇಹಿತ ನಾಗಿರುವನು.
22:12b.PRO.022.012 ಕರ್ತನ ಕಣ್ಣುಗಳು ತಿಳುವಳಿಕೆಯನ್ನು ಕಾಪಾಡುತ್ತವೆ; ಆತನು ದೋಷಿಯ ಮಾತುಗಳನ್ನು ಕೆಡವಿಹಾಕುತ್ತಾನೆ.
22:13b.PRO.022.013 ಸೋಮಾರಿಯು--ಹೊರಗೆ ಸಿಂಹವಿದೆ; ಅದು ನನ್ನನ್ನು ಬೀದಿಗಳಲ್ಲಿ ಕೊಂದು ಹಾಕುತ್ತದೆ ಎಂದು ಹೇಳುತ್ತಾನೆ.
22:14b.PRO.022.014 ಪರಸ್ತ್ರೀಯ ಬಾಯಿ ಆಳವಾದ ಕುಣಿ; ಕರ್ತನಿಗೆ ಅಸಹ್ಯವಾದವನು ಅದರಲ್ಲಿ ಬೀಳುವನು.
22:15b.PRO.022.015 ಮೂರ್ಖತನವು ಹುಡುಗನ ಹೃದಯದಲ್ಲಿ ಕಟ್ಟಲ್ಪಟ್ಟಿದೆ. ಶಿಕ್ಷೆಯ ಬೆತ್ತವು ಅದನ್ನು ಅವನಿಂದ ದೂರವಾಗಿ ಓಡಿಸಿಬಿಡುವದು.
22:16b.PRO.022.016 ತನ್ನ ಐಶ್ವರ್ಯವನ್ನು ವೃದ್ಧಿಗೊಳಿಸುವದಕ್ಕಾಗಿ ಬಡವರನ್ನು ಹಿಂಸಿಸುವವನೂ ಐಶ್ವರ್ಯವಂತರಿಗೆ ಕೊಡುವವನೂ ನಿಶ್ಚಯವಾಗಿ ಕೊರತೆಪಡುವನು.
22:17b.PRO.022.017 ಕಿವಿಗೊಟ್ಟು ಜ್ಞಾನಿ ಗಳ ಮಾತನ್ನು ಕೇಳು; ನನ್ನ ತಿಳುವಳಿಕೆಗೆ ನಿನ್ನ ಹೃದಯ ವನ್ನು ಪ್ರಯೋಗಿಸು.
22:18b.PRO.022.018 ಅವುಗಳನ್ನು ನಿನ್ನೊಳಗೆ ಕಾಪಾಡಿದರೆ ಅದು ರಮ್ಯವಾಗಿದೆ; ಅವು ನಿನ್ನ ತುಟಿ ಗಳಲ್ಲಿ ಹೊಂದಿಕೊಂಡಿರುವವು.
22:19b.PRO.022.019 ನಿನ್ನ ಭರವಸವು ಕರ್ತನಲ್ಲಿ ಇರುವಂತೆ ನಿನಗೆ ಈ ದಿವಸ ತಿಳಿಯ ಪಡಿಸಿದ್ದೇನೆ.
22:20b.PRO.022.020 ಸತ್ಯದ ಮಾತುಗಳ ಸ್ಥಿರತೆಯನ್ನು ನಾನು ನಿನಗೆ ತಿಳಿಯಪಡಿಸುವಂತೆಯೂ ನಿನ್ನ ಕಡೆಗೆ ಕಳುಹಿ ಸಿದವರಿಗೆ
22:21b.PRO.022.021 ನೀನು ಸತ್ಯದ ಮಾತುಗಳನ್ನು ಉತ್ತರಿ ಸುವಂತೆಯೂ ಆಲೋಚನೆಗಳ ತಿಳುವಳಿಕೆಯಲ್ಲಿ ಶ್ರೇಷ್ಠವಾದ ಸಂಗತಿಗಳನ್ನು ನಿನಗೆ ಬರೆಯಲಿಲ್ಲವೋ?
22:22b.PRO.022.022 ಅವನು ಬಡವನೆಂದು ಬಡವನನ್ನು ಸೂರೆಮಾಡ ಬೇಡ; ಮಾತ್ರವಲ್ಲದೆ ದ್ವಾರದಲ್ಲಿ ದರಿದ್ರರನ್ನು ಹಿಂಸಿಸ ಬೇಡ.
22:23b.PRO.022.023 ಕರ್ತನು ಅವರ ವ್ಯಾಜ್ಯವನ್ನು ನಡಿಸಿ ಸೂರೆ ಮಾಡಿದವರ ಪ್ರಾಣವನ್ನು ಸೂರೆಮಾಡುವನು.
22:24b.PRO.022.024 ಸಿಟ್ಟುಗಾರನೊಂದಿಗೆ ಸ್ನೇಹಮಾಡಬೇಡ; ಕೋಪಿ ಷ್ಠನ ಸಂಗಡ ನೀನು ಹೋಗಬೇಡ.
22:25b.PRO.022.025 ಹಾಗೆ ಮಾಡಿ ದರೆ ನೀನು ಅವನ ನಡತೆಗಳನ್ನು ಕಲಿತು ನಿನ್ನ ಪ್ರಾಣಕ್ಕೆ ಉರ್ಲನ್ನು ಸಿಕ್ಕಿಸಿಕೊಳ್ಳುವಿ.
22:26b.PRO.022.026 ಕೈ ಕೊಡುವವರಲ್ಲಿ ಇಲ್ಲವೆ ಸಾಲಕ್ಕೆ ಹೊಣೆಯಾಗುವವರಲ್ಲಿ ನೀನು ಒಬ್ಬ ನಾಗಬೇಡ.
22:27b.PRO.022.027 ಸಲ್ಲಿಸುವದಕ್ಕೆ ನಿನಗೆ ಏನೂ ಇಲ್ಲದೆ ಹೋದರೆ ನಿನ್ನ ಕೆಳಗಿನ ಹಾಸಿಗೆಯನ್ನು ಅವನು ತೆಗೆದು ಕೊಂಡು ಹೋಗುವದು ಯಾಕೆ?
22:28b.PRO.022.028 ನಿನ್ನ ಪಿತೃಗಳು ಹಾಕಿದ ಪೂರ್ವಕಾಲದ ಮೇರೆಯನ್ನು ತೆಗೆಯಬೇಡ.ತನ್ನ ಕೆಲಸದಲ್ಲಿ ಶ್ರದ್ಧೆಯುಳ್ಳವನನ್ನು ನೀನು ನೋಡಿ ದ್ದೀಯಾ? ಅವನು ನೀಚರ ಮುಂದೆ ಅಲ್ಲ, ಅರಸರ ಮುಂದೆಯೇ ನಿಲ್ಲುವನು.
22:29b.PRO.022.029 ತನ್ನ ಕೆಲಸದಲ್ಲಿ ಶ್ರದ್ಧೆಯುಳ್ಳವನನ್ನು ನೀನು ನೋಡಿ ದ್ದೀಯಾ? ಅವನು ನೀಚರ ಮುಂದೆ ಅಲ್ಲ, ಅರಸರ ಮುಂದೆಯೇ ನಿಲ್ಲುವನು.
23
23:1b.PRO.023.001 ಆಳುವವನ ಸಂಗಡ ನೀನು ಊಟಕ್ಕೆ ಕೂತಿರುವಾಗ ನಿನ್ನ ಎದುರಿನಲ್ಲಿ ಯಾವದು ಇದೆ ಎಂದು ಶ್ರದ್ಧೆಯಿಂದ ಆಲೋಚಿಸು;
23:2b.PRO.023.002 ನೀನು ಹೊಟ್ಟೆ ಬಾಕನಾಗಿದ್ದರೆ ನಿನ್ನ ಕುತ್ತಿಗೆಗೆ ಕತ್ತಿಯನ್ನು ಇಟ್ಟುಕೋ.
23:3b.PRO.023.003 ಅವನ ರುಚಿ ಪದಾರ್ಥಗಳನ್ನು ಅಪೇಕ್ಷಿ ಸಬೇಡ; ಅದು ಮೋಸದ ಆಹಾರವು.
23:4b.PRO.023.004 ಐಶ್ವರ್ಯ ವಂತನಾಗುವದಕ್ಕೆ ಪ್ರಯಾಸಪಡಬೇಡ; ನಿನ್ನ ಸ್ವಂತ ಜ್ಞಾನವನ್ನು ಬಿಟ್ಟುಬಿಡು.
23:5b.PRO.023.005 ಇಲ್ಲದಿರುವದರ ಮೇಲೆ ನಿನ್ನ ದೃಷ್ಟಿಯನ್ನು ಇಡುವಿಯಾ? ಐಶ್ವರ್ಯವು ನಿಸ್ಸಂದೇಹವಾಗಿ ರೆಕ್ಕೆಗಳನ್ನು ಕಟ್ಟಿಕೊಂಡು ಹದ್ದಿನಂತೆ ಆಕಾಶದ ಕಡೆಗೆ ಹಾರಿಹೋಗುತ್ತದೆ.
23:6b.PRO.023.006 ಕೆಟ್ಟದೃಷ್ಟಿ ಯುಳ್ಳವನ ರೊಟ್ಟಿಯನ್ನು ತಿನ್ನಬೇಡ; ಇಲ್ಲವೆ ಅವನ ರುಚಿ ಪದಾರ್ಥಗಳನ್ನು ಆಶಿಸಬೇಡ;
23:7b.PRO.023.007 ಅವನು ತನ್ನ ಹೃದಯದಲ್ಲಿ ಯೋಚಿಸುವಂತೆಯೇ ಇದ್ದಾನೆ; ಅವನು --ತಿನ್ನು, ಕುಡಿ ಎಂದು ಹೇಳುತ್ತಾನೆ; ಅವನ ಹೃದಯವು ನಿನ್ನೊಂದಿಗಿಲ್ಲ.
23:8b.PRO.023.008 ನೀನು ತಿಂದ ತುತ್ತನ್ನು ಕಕ್ಕಿಬಿಟ್ಟು ನಿನ್ನ ಸವಿಮಾತುಗಳನ್ನು ಕಳೆದುಕೊಳ್ಳುವಿ.
23:9b.PRO.023.009 ಬುದ್ಧಿ ಹೀನನ ಸಂಗಡ ಮಾತಾಡಬೇಡ; ನಿನ್ನ ಮಾತುಗಳ ಜ್ಞಾನವನ್ನು ಅವನು ತಿರಸ್ಕರಿಸುವನು.
23:10b.PRO.023.010 ಪೂರ್ವಕಾ ಲದ ಮೇರೆಯನ್ನು ತೆಗೆಯಬೇಡ; ಅನಾಥರ ಹೊಲ ಗಳಲ್ಲಿ ಪ್ರವೇಶಿಸದಿರು;
23:11b.PRO.023.011 ಅವರ ವಿಮೋಚಕನು ಬಲಶಾಲಿಯಾಗಿದ್ದಾನೆ; ಅವರ ವ್ಯಾಜ್ಯಕ್ಕಾಗಿ ಆತನು ವಾದಿಸುವನು.
23:12b.PRO.023.012 ಶಿಕ್ಷಣಕ್ಕೆ ನಿನ್ನ ಹೃದಯವನ್ನೂ ವಿವೇ ಕದ ಮಾತುಗಳಿಗೆ ನಿನ್ನ ಕಿವಿಗಳನ್ನೂ ಕೊಡು.
23:13b.PRO.023.013 ಹುಡು ಗನ ಶಿಕ್ಷೆಗೆ ಹಿಂತೆಗೆಯಬೇಡ; ಅವನನ್ನು ಬೆತ್ತದಿಂದ ಹೊಡೆದರೆ ಅವನು ಸಾಯುವದಿಲ್ಲ.
23:14b.PRO.023.014 ಅವನನ್ನು ಬೆತ್ತದಿಂದ ಹೊಡೆದು ಪಾತಾಳದಿಂದ ಅವನ ಆತ್ಮವನ್ನು ತಪ್ಪಿಸುವಿ;
23:15b.PRO.023.015 ನನ್ನ ಮಗನೇ, ನಿನ್ನ ಹೃದಯವು ಜ್ಞಾನ ವುಳ್ಳದ್ದಾಗಿದ್ದರೆ ನನ್ನ ಹೃದಯವು ಹೌದು, ನನ್ನದೇ ಹರ್ಷಿಸುವದು.
23:16b.PRO.023.016 ಹೌದು, ನಿನ್ನ ತುಟಿಗಳು ಯಥಾ ರ್ಥವಾದವುಗಳನ್ನು ಮಾತಾಡಿದರೆ ನನ್ನ ಅಂತರಾತ್ಮವು ಸಂತೋಷಿಸುವದು.
23:17b.PRO.023.017 ಪಾಪಿಗಳಿಗಾಗಿ ನಿನ್ನ ಹೃದಯವು ಅಸೂಯೆಪಡದಿರಲಿ; ನೀನು ದಿನವೆಲ್ಲಾ ಕರ್ತನ ಭಯ ದಲ್ಲಿ ಇರು.
23:18b.PRO.023.018 ಖಂಡಿತವಾಗಿಯೂ ಅಂತ್ಯವು ಬರು ತ್ತದೆ; ನಿನ್ನ ನಿರೀಕ್ಷೆಯು ನಿರರ್ಥಕವಾಗದು.
23:19b.PRO.023.019 ನನ್ನ ಮಗನೇ, ಕೇಳಿ ಜ್ಞಾನವಂತನಾಗು; ನ್ಯಾಯಮಾರ್ಗ ದಲ್ಲಿ ನಿನ್ನ ಹೃದಯವನ್ನು ನಡಿಸು.
23:20b.PRO.023.020 ಮದ್ಯಪಾನ ಮಾಡುವವರಲ್ಲಿಯೂ ಅತಿಮಾಂಸ ಭಕ್ಷಕರಲ್ಲಿಯೂ ಇರಬೇಡ.
23:21b.PRO.023.021 ಕುಡುಕರೂ ಹೊಟ್ಟೇಬಾಕರೂ ದುರ್ಗ ತಿಗೆ ಬರುವರು; ತೂಕಡಿಕೆಯು ಒಬ್ಬನಿಗೆ ಹಳೇ ಬಟ್ಟೆ ಗಳನ್ನು ಹೊದಿಸುವದು.
23:22b.PRO.023.022 ನಿನ್ನನ್ನು ಪಡೆದ ತಂದೆಯ ಮಾತಿಗೆ ಕಿವಿಗೊಡು; ನಿನ್ನ ತಾಯಿ ಮುಪ್ಪಿನವಳಾದಾಗ ಆಕೆಯನ್ನು ಅಸಡ್ಡೆಮಾಡಬೇಡ.
23:23b.PRO.023.023 ಸತ್ಯವನ್ನೂ ಜ್ಞಾನ ವನ್ನೂ ಶಿಕ್ಷೆಯನ್ನೂ ವಿವೇಕವನ್ನೂ ಕೊಂಡು ಅವುಗ ಳನ್ನು ಮಾರಬೇಡ.
23:24b.PRO.023.024 ನೀತಿವಂತನ ತಂದೆಯು ಬಹಳ ವಾಗಿ ಸಂತೋಷಪಡುವನು; ಜ್ಞಾನಿಯಾದ ಮಗನನ್ನು ಪಡೆದವನಿಗೆ ಅವನಿಂದ ಆನಂದವಾಗುವದು.
23:25b.PRO.023.025 ನಿನ್ನ ತಂದೆ ತಾಯಿಗಳು ಸಂತೋಷಿಸುವರು; ನಿನ್ನನ್ನು ಹೆತ್ತ ವರು ಆನಂದಿಸುವರು.
23:26b.PRO.023.026 ನನ್ನ ಮಗನೇ, ನಿನ್ನ ಹೃದಯ ವನ್ನು ನನಗೆ ಕೊಡು; ನನ್ನ ಮಾರ್ಗಗಳನ್ನು ನಿನ್ನ ಕಣ್ಣುಗಳು ದೃಷ್ಟಿಯಿಟ್ಟು ನೋಡಲಿ.
23:27b.PRO.023.027 ಸೂಳೆಯು ಆಳವಾದ ಕುಣಿ; ಪರಸ್ತ್ರೀಯು ಇಕ್ಕಟ್ಟಾದ ಗುಂಡಿ.
23:28b.PRO.023.028 ಪ್ರಾಣಿಗಾಗಿಯೋ ಎಂಬಂತೆ ಅವಳು ಹೊಂಚು ಹಾಕಿ ಮನುಷ್ಯರಲ್ಲಿ ದೋಷಗಳನ್ನು ಹೆಚ್ಚಿಸುತ್ತಾಳೆ.
23:29b.PRO.023.029 ಯಾರಿಗೆ ಅಯ್ಯೋ? ಯಾರಿಗೆ ದುಃಖ? ಯಾರಿಗೆ ಕಲಹಗಳು? ಯಾರು ಗೋಳಾಡುತ್ತಾರೆ? ಯಾರು ಸುಮ್ಮಸುಮ್ಮನೆ ಗಾಯ ಪಡುತ್ತಾರೆ? ಯಾರಿಗೆ ಕೆಂಪೇ ರಿದ ಕಣ್ಣುಗಳು?
23:30b.PRO.023.030 ದ್ರಾಕ್ಷಾರಸಕ್ಕಾಗಿ ಕಾದಿರುವಂಥ ವರು ಮಿಶ್ರಿತ ದ್ರಾಕ್ಷಾರಸವನ್ನು ಹುಡುಕುವವರಾಗಿ ಇರುತ್ತಾರೆ.
23:31b.PRO.023.031 ದ್ರಾಕ್ಷಾರಸವು ಕೆಂಪಾಗಿದ್ದು ಪಾತ್ರೆಯಲ್ಲಿ ಥಳಥಳಿಸುತ್ತಾ ಚಲಿಸಿದರೆ ಅದನ್ನು ನೋಡಬೇಡ.
23:32b.PRO.023.032 ಕೊನೆಗೆ ಅದು ಹಾವಿನಂತೆ ಮತ್ತು ವಿಷಸರ್ಪದಂತೆ ಕಚ್ಚುತ್ತದೆ.
23:33b.PRO.023.033 ನಿನ್ನ ಕಣ್ಣುಗಳು ಪರಸ್ತ್ರೀಯರನ್ನು ನೋಡಿ ದರೆ ನಿನ್ನ ಹೃದಯವು ವಕ್ರವಾದ ಭಾಷೆಯನ್ನು ಉಚ್ಚರಿ ಸುವದು.
23:34b.PRO.023.034 ಹೌದು, ಸಮುದ್ರದ ಮಧ್ಯದಲ್ಲಿ ಮಲಗಿ ರುವವನಂತೆ ಇಲ್ಲವೆ ಹಡಗಿನ ಕಂಬದ ತುದಿಯಲ್ಲಿ ಇದ್ದವನಂತೆ ನೀನು ಇರುವಿ.ನೀನು--ಜನರು ನನ್ನನ್ನು ಹೊಡೆದರೂ ನಾನು ಅಸ್ವಸ್ಥನಾಗಲಿಲ್ಲ; ಅವರು ನನ್ನನ್ನು ಹೊಡೆದರೂ ನನಗೆ ನೋವಾಗಲಿಲ್ಲ; ಯಾವಾಗ ಎಚ್ಚತ್ತೇನು? ಪುನಃ ನಾನು ಅದನ್ನು ತಿರುಗಿ ಹುಡುಕೇನು ಎಂದು ಹೇಳುತ್ತೀ.
23:35b.PRO.023.035 ನೀನು--ಜನರು ನನ್ನನ್ನು ಹೊಡೆದರೂ ನಾನು ಅಸ್ವಸ್ಥನಾಗಲಿಲ್ಲ; ಅವರು ನನ್ನನ್ನು ಹೊಡೆದರೂ ನನಗೆ ನೋವಾಗಲಿಲ್ಲ; ಯಾವಾಗ ಎಚ್ಚತ್ತೇನು? ಪುನಃ ನಾನು ಅದನ್ನು ತಿರುಗಿ ಹುಡುಕೇನು ಎಂದು ಹೇಳುತ್ತೀ.
24
24:1b.PRO.024.001 ಕೆಟ್ಟವರಿಗೆ ವಿರೋಧವಾಗಿ ನೀನು ಅಸೂಯೆಪಡದಿರು; ಇಲ್ಲವೆ ಅವರ ಸಂಗಡ ಇರುವದಕ್ಕೆ ಅಪೇಕ್ಷಿಸಬೇಡ;
24:2b.PRO.024.002 ಅವರ ಹೃದಯವು ನಾಶನವನ್ನು ಅಭ್ಯಾಸಿಸುತ್ತದೆ; ಅವರ ತುಟಿಗಳು ಹಾನಿ ಯನ್ನು ಪ್ರಸ್ತಾಪಿಸುತ್ತವೆ.
24:3b.PRO.024.003 ಜ್ಞಾನದಿಂದ ಮನೆಯು ಕಟ್ಟಲ್ಪಡುತ್ತದೆ; ವಿವೇಕದಿಂದ ಅದು ಸ್ಥಿರಗೊಳ್ಳುತ್ತದೆ;
24:4b.PRO.024.004 ತಿಳುವಳಿಕೆಯಿಂದ ಎಲ್ಲಾ ಅಮೂಲ್ಯವಾದ ಮತ್ತು ಇಷ್ಟ ಸಂಪತ್ತಿನಿಂದ ಕೋಣೆಗಳು ತುಂಬಲ್ಪಡುವವು.
24:5b.PRO.024.005 ಜ್ಞಾನಿಯು ಬಲವುಳ್ಳವನು; ಹೌದು, ತಿಳುವಳಿಕೆಯು ಳ್ಳವನು ಬಲವನ್ನು ಹೆಚ್ಚಿಸಿಕೊಳ್ಳುತ್ತಾನೆ.
24:6b.PRO.024.006 ಜ್ಞಾನಯುಕ್ತ ವಾದ ಆಲೋಚನೆಯಿಂದ ನಿನ್ನ ಯುದ್ಧವನ್ನು ನಡಿ ಸುತ್ತೀ; ಬಹುಮಂದಿ ಸಲಹೆಗಾರರು ಇರುವಲ್ಲಿ ಸುರ ಕ್ಷಣೆ ಇರುತ್ತದೆ.
24:7b.PRO.024.007 ಜ್ಞಾನವು ಬುದ್ಧಿಹೀನನಿಗೆ ನಿಲುಕದ್ದಾ ಗಿದೆ. ದ್ವಾರದಲ್ಲಿ ಅವನು ತನ್ನ ಬಾಯಿಯನ್ನು ತೆರೆಯು ವದಿಲ್ಲ.
24:8b.PRO.024.008 ಕೇಡನ್ನು ಕಲ್ಪಿಸುವವನು ಕುಚೋದ್ಯಗಾರ ನೆಂದು ಕರೆಯಲ್ಪಡುವನು.
24:9b.PRO.024.009 ಬುದ್ಧಿಹೀನನ ಆಲೋ ಚನೆಯು ಪಾಪ; ಪರಿಹಾಸ್ಯಗಾರನು ಮನುಷ್ಯರಿಗೆ ಅಸಹ್ಯ.
24:10b.PRO.024.010 ಇಕ್ಕಟ್ಟಿನ ದಿನದಲ್ಲಿ ನೀನು ಬಳಲಿಹೋದರೆ ನಿನ್ನ ಬಲವು ಕೊಂಚವಾಗಿದೆ.
24:11b.PRO.024.011 ಮರಣಕ್ಕೆ ಸೆಳೆಯ ಲ್ಪಟ್ಟವನನ್ನು ಬಿಡಿಸುವದಕ್ಕೂ ವಧಿಸಲ್ಪಡುವದಕ್ಕೆ ಸಿದ್ಧವಾದವರನ್ನು ನೀನು ರಕ್ಷಿಸಲೂ ಹಿಂದೆಗೆದರೆ
24:12b.PRO.024.012 ನೀನು--ಇಗೋ, ಅದು ನನಗೆ ಗೊತ್ತಿಲ್ಲ ಎಂದು ಹೇಳಿದರೆ ಹೃದಯವನ್ನು ಪರಿಶೋಧಿಸುವಾತನು ಅದನ್ನು ಯೋಚಿಸುವದಿಲ್ಲವೋ? ನಿನ್ನ ಆತ್ಮವನ್ನು ಕಾಯುವಾತನು ಅದನ್ನು ತಿಳಿಯುವದಿಲ್ಲವೋ? ಪ್ರತಿ ಯೊಬ್ಬನಿಗೆ ತನ್ನ ಕಾರ್ಯಗಳಿಗನುಸಾರವಾಗಿ ಆತನು ಪ್ರತಿಫಲವನ್ನು ಕೊಡದೆ ಇರುವನೇ?
24:13b.PRO.024.013 ನನ್ನ ಮಗನೇ, ಜೇನು ಚೆನ್ನಾಗಿರುವದರಿಂದಲೂ ನಿನ್ನ ಬಾಯಿಗೆ ಜೇನು ತುಪ್ಪವು ಸಿಹಿಯಾಗಿರುವದರಿಂದಲೂ ಅದನ್ನು ತಿನ್ನು;
24:14b.PRO.024.014 ಹೀಗೆ ನಿನ್ನ ಪ್ರಾಣಕ್ಕೆ ಜ್ಞಾನದ ತಿಳುವಳಿಕೆಯು ಇರುವದು; ಅದು ಸಿಕ್ಕಿದಾಗ ಬಹುಮಾನವಿರುವದು; ನಿನ್ನ ನಿರೀಕ್ಷೆಯು ನಿರರ್ಥಕವಾಗುವದಿಲ್ಲ.
24:15b.PRO.024.015 ದುಷ್ಟನೇ, ನೀತಿವಂತನ ನಿವಾಸಕ್ಕೆ ಹೊಂಚುಹಾಕಬೇಡ; ಅವನ ವಿಶ್ರಾಂತಿಯ ಸ್ಥಳವನ್ನು ಸೂರೆಮಾಡಬೇಡ;
24:16b.PRO.024.016 ನೀತಿ ವಂತನು ಏಳು ಸಾರಿ ಬಿದ್ದರೂ ಮತ್ತೆ ಏಳುತ್ತಾನೆ; ಆದರೆ ದುಷ್ಟನು ಕೇಡಿಗೆ ಬೀಳುವನು.
24:17b.PRO.024.017 ನಿನ್ನ ಶತ್ರು ಬಿದ್ದರೆ ಸಂತೋಷಿಸಬೇಡ; ಅವನು ಎಡವಿದರೆ ನಿನ್ನ ಹೃದಯವು ಹರ್ಷಿಸದಿರಲಿ;
24:18b.PRO.024.018 ಕರ್ತನು ಅದನ್ನು ನೋಡಿದಾಗ ಅದು ಆತನಿಗೆ ಇಷ್ಟವಿಲ್ಲದ್ದರಿಂದ ಆತನು ಅವನ ಕಡೆಯಿಂದ ತನ್ನ ಕೋಪವನ್ನು ತಿರುಗಿಸಾನು.
24:19b.PRO.024.019 ಕೆಟ್ಟವರ ಮೇಲೆ ಉರಿಗೊಳ್ಳಬೇಡ; ಇಲ್ಲವೆ ದುಷ್ಟ ರಿಗಾಗಿ ಅಸೂಯೆಪಡಬೇಡ;
24:20b.PRO.024.020 ಕೆಡುಕನಿಗೆ ಪ್ರತಿ ಫಲವು ಇರುವದಿಲ್ಲ; ದುಷ್ಟರ ದೀಪವು ಆರಿಹೋಗು ವದು.
24:21b.PRO.024.021 ನನ್ನ ಮಗನೇ, ಕರ್ತನಿಗೂ ಅರಸನಿಗೂ ಭಯಪಡು; ಭಯಪಡದವರ ಗೊಡವೆಗೆ ಹೋಗ ಬೇಡ.
24:22b.PRO.024.022 ಅವರ ವಿಪತ್ತು ಫಕ್ಕನೆ ಸಂಭವಿಸುವದು; ಅವರಿಬ್ಬರ ನಾಶನವು ಯಾರಿಗೆ ತಿಳಿದೀತು?
24:23b.PRO.024.023 ಇವು ಸಹ ಜ್ಞಾನಿಗಳಿಗೆ ಸಂಬಂಧಪಟ್ಟಿವೆ. ನ್ಯಾಯವಿಚಾರಣೆ ಯಲ್ಲಿ ಪಕ್ಷಪಾತವು ಸರಿಯಲ್ಲ.
24:24b.PRO.024.024 ದುಷ್ಟನಿಗೆ--ನೀನು ನೀತಿವಂತನು ಎಂದು ಹೇಳುವವನನ್ನು ಜನರು ಶಪಿಸು ವರು, ಜನಾಂಗಗಳು ಅವನನ್ನು ಹೇಸಿಕೊಳ್ಳುವರು.
24:25b.PRO.024.025 ಗದರಿಸುವವರಿಗೆ ಆನಂದವಾಗುವದು; ಅವರ ಮೇಲೆ ಶುಭದಾಯಕ ಆಶೀರ್ವಾದವು ಬರುವದು.
24:26b.PRO.024.026 ಸರಿಯಾಗಿ ಉತ್ತರಿಸುವವನ ತುಟಿಗಳನ್ನು ಪ್ರತಿ ಯೊಬ್ಬನು ಮುದ್ದಿಡುವನು.
24:27b.PRO.024.027 ಹೊರಗೆ ನಿನ್ನ ಕೆಲಸ ವನ್ನು ಸಿದ್ಧಪಡಿಸಿಕೊ; ಅದು ಹೊಲದಲ್ಲಿ ನಿನಗೋಸ್ಕರ ಸರಿಯಾಗುವಂತೆ ಮಾಡಿಕೊ; ತರುವಾಯ ನಿನ್ನ ಮನೆಯನ್ನು ಕಟ್ಟಿಕೋ.
24:28b.PRO.024.028 ಕಾರಣವಿಲ್ಲದೆ ನೆರೆಯವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಬೇಡ; ನಿನ್ನ ತುಟಿಗಳಿಂದ ಮೋಸಮಾಡಬೇಡ.
24:29b.PRO.024.029 ನನಗೆ ಅವನು ಮಾಡಿದಂತೆ ನಾನೂ ಅವನಿಗೆ ಮಾಡುವೆನು; ಅವನು ಮಾಡಿದ್ದಕ್ಕೆ ಸರಿಯಾಗಿ ಮುಯ್ಯಿ ತೀರಿಸುವೆನು ಎಂದು ಹೇಳಬೇಡ.
24:30b.PRO.024.030 ಸೋಮಾರಿಯ ಹೊಲದ ಪಕ್ಕದಲ್ಲಿಯೂ ಬುದ್ಧಿ ಹೀನನ ದ್ರಾಕ್ಷೇ ತೋಟದ ಕಡೆಯಲ್ಲಿಯೂ ನಾನು ಹಾದು ಹೋದೆನು;
24:31b.PRO.024.031 ಆಗ ಇಗೋ, ಹೊಲವೆಲ್ಲವೂ ಮುಳ್ಳು ಗಿಡಗಳಿಂದ ಬೆಳೆದು ಕಳೆಗಳು ಅವುಗಳನ್ನು ಮುಚ್ಚಿ ಅದರ ಕಲ್ಲಿನ ಗೋಡೆಯು ಬಿದ್ದುಹೋಯಿತು.
24:32b.PRO.024.032 ಆಗ ನಾನು ನೋಡಿ ಮನಸ್ಸಿಟ್ಟೆನು; ದೃಷ್ಟಿಸಿ ಶಿಕ್ಷಿತನಾದೆನು.
24:33b.PRO.024.033 ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ತೂಕಡಿಕೆ, ನಿದ್ರೆಗಾಗಿ ಇನ್ನು ಕೊಂಚ ಕೈ ಮುದುರಿ ಕೊಳ್ಳುವದು;ಹೀಗೆ ನಿನ್ನ ಬಡತನವು ಪ್ರಯಾಣಿಕನ ಹಾಗೆಯೂ ನಿನ್ನ ಕೊರತೆಯು ಆಯುಧದಾರ ನಂತೆಯೂ ಬರುವವು.
24:34b.PRO.024.034 ಹೀಗೆ ನಿನ್ನ ಬಡತನವು ಪ್ರಯಾಣಿಕನ ಹಾಗೆಯೂ ನಿನ್ನ ಕೊರತೆಯು ಆಯುಧದಾರ ನಂತೆಯೂ ಬರುವವು.
25
25:1b.PRO.025.001 ಯೆಹೂದದ ಅರಸನಾದ ಹಿಜ್ಕೀಯನ ಲೇಖಕರು ಬರೆದಿರುವ ಇವು ಕೂಡ ಸೊಲೊಮೋನನ ಸಾಮತಿಗಳೇ.
25:2b.PRO.025.002 ವಿಷಯವನ್ನು ರಹಸ್ಯ ಮಾಡುವದು ದೇವರ ಮಹಿಮೆ; ಅರಸರ ಘನತೆಯು ವಿಷಯವನ್ನು ಶೋಧಿಸುವದು.
25:3b.PRO.025.003 ಆಕಾ ಶವು, ಉನ್ನತ ಭೂಮಿಯು ಅಗಾಧ ಮತ್ತು ಅರಸರ ಹೃದಯವು ಅಗೋಚರ.
25:4b.PRO.025.004 ಬೆಳ್ಳಿಯಿಂದ ಕಲ್ಮಶವನ್ನು ತೆಗೆದುಹಾಕಿದರೆ ಅಕ್ಕಸಾಲಿಗನಿಗೆ ಬೇಕಾದ ಪಾತ್ರೆಯು ಬರುವದು.
25:5b.PRO.025.005 ಅರಸನ ಸಮ್ಮುಖದಿಂದ ದುಷ್ಟರನ್ನು ತೆಗೆದುಹಾಕಿದರೆ ಅವನ ಸಿಂಹಾಸನವು ನೀತಿಯಲ್ಲಿ ಸ್ಥಿರವಾಗುವದು.
25:6b.PRO.025.006 ಅರಸನ ಸನ್ನಿಧಿಯಲ್ಲಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ; ದೊಡ್ಡವರ ಸ್ಥಾನದಲ್ಲಿ ನಿಲ್ಲಬೇಡ;
25:7b.PRO.025.007 ಮೇಲಕ್ಕೆ ಬಾ ಎಂದು ನೀನು ಕರೆಯಿಸಿಕೊಳ್ಳುವದು, ನಿನ್ನ ಕಣ್ಣುಗಳು ನೋಡಿದ ರಾಜನ ಸನ್ನಿಧಿಯಲ್ಲಿ ನೀನು ಕೆಳಗಿನ ಸ್ಥಾನಕ್ಕೆ ತಗ್ಗಿಸಲ್ಪಡುವದಕ್ಕಿಂತ ಲೇಸು.
25:8b.PRO.025.008 ನಿನ್ನ ನೆರೆಯವನು ನಿನ್ನನ್ನು ಅವಮಾನಕ್ಕೆ ಗುರಿಮಾಡಿದಾಗ ಕಡೆಯಲ್ಲಿ ಏನು ಮಾಡಬೇಕೆಂಬದು ನೀನು ತಿಳಿಯ ದಂತೆ ದುಡುಕಿನಿಂದ ಕಲಹಮಾಡುವದಕ್ಕಾಗಿ ಹೋಗ ಬೇಡ.
25:9b.PRO.025.009 ನಿನ್ನ ನೆರೆಯವನೊಂದಿಗೆ ನಿನ್ನ ವ್ಯಾಜ್ಯವನ್ನು ಚರ್ಚಿಸು; ಗುಟ್ಟನ್ನು ಬೇರೊಬ್ಬನಿಗೆ ಹೊರಪಡಿಸಬೇಡ;
25:10b.PRO.025.010 ಅದನ್ನು ಕೇಳುವವನು ನಿನ್ನನ್ನು ಅವಮಾನಕ್ಕೆ ಗುರಿಪಡಿಸಿಯಾನು, ನಿನ್ನ ಅಪಕೀರ್ತಿಯು ಹೋಗದೆ ಇದ್ದೀತು.
25:11b.PRO.025.011 ಸಮಯೋಚಿತವಾದ ಮಾತು ಬೆಳ್ಳಿಯ ಚಿತ್ರಗಳಲ್ಲಿ ಬಂಗಾರದ ಸೇಬಿನಂತಿದೆ.
25:12b.PRO.025.012 ಕೇಳುವ ಕಿವಿಗೆ ಜ್ಞಾನಿಯ ಗದರಿಕೆಯು ಹೇಗೋ ಹಾಗೇ ಬಂಗಾ ರದ ಕಿವಿಯ ಓಲೆಯು ಚೊಕ್ಕಬಂಗಾರದ ಆಭರಣ ದಂತಿದೆ.
25:13b.PRO.025.013 ಸುಗ್ಗಿಯ ಕಾಲದಲ್ಲಿ ಹಿಮಶೀತದ ಹಾಗೆ ತನ್ನನ್ನು ಕಳುಹಿಸುವವರಿಗೆ ನಂಬಿಗಸ್ಥನಾದ ಸೇವಕನಿ ದ್ದಾನೆ. ತನ್ನ ಯಜಮಾನರ ಪ್ರಾಣವನ್ನು ಅವನು ನವಚೈತನ್ಯಗೊಳಿಸುತ್ತಾನೆ.
25:14b.PRO.025.014 ಸುಳ್ಳಾದ ದಾನದ ವಿಷ ಯವಾಗಿ ಹೊಗಳಿಕೊಳ್ಳುವವನು ಮಳೆ ಇಲ್ಲದ ಮೋಡ ಗಳ ಮತ್ತು ಗಾಳಿಯ ಹಾಗೆ ಇದ್ದಾನೆ.
25:15b.PRO.025.015 ದೀರ್ಘ ಶಾಂತಿಯಿಂದ ಪ್ರಭುವನ್ನು ಸಮ್ಮತಿಪಡಿಸಬಹುದು. ಮೃದುವಾದ ನಾಲಿಗೆಯು ಎಲುಬನ್ನು ಮುರಿಯುತ್ತದೆ.
25:16b.PRO.025.016 ಜೇನನ್ನು ಕಂಡುಕೊಂಡಿದ್ದೀಯಾ? ಅದನ್ನು ನಿನಗೆ ತೃಪ್ತಿಯಾಗುವಷ್ಟು ತಿನ್ನು; ಹೊಟ್ಟೆತುಂಬ ತಿಂದರೆ ಕಾರ ಬೇಕಾದೀತು.
25:17b.PRO.025.017 ನೆರೆಯವನು ಬೇಸರಗೊಂಡು ಹಗೆ ಮಾಡದ ಹಾಗೆ ಅವನ ಮನೆಯಲ್ಲಿ ಅಪರೂಪವಾಗಿ ಹೆಜ್ಜೆಯಿಡು.
25:18b.PRO.025.018 ತನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳುವವನು ಚಮಟಿಗೆ, ಕತ್ತಿ, ಮತ್ತು ಹರಿತವಾದ ಬಾಣವಾಗಿದ್ದಾನೆ.
25:19b.PRO.025.019 ಕಷ್ಟ ಕಾಲದಲ್ಲಿ ಅಪನಂಬಿಗಸ್ಥನಾದ ಮನುಷ್ಯನಲ್ಲಿಯ ಭರವಸವು ಮುರಿದ ಹಲ್ಲು, ಕೀಲು ತಪ್ಪಿದ ಪಾದವು.
25:20b.PRO.025.020 ಚಳಿಯಲ್ಲಿ ಬಟ್ಟೆಯನ್ನು ತೆಗೆದುಹಾಕುವವನು ಸೋಡಾಉಪ್ಪಿನ ಹುಳಿಯ ಹಾಗೆಯೇ ಮನಗುಂದಿದವನಿಗೆ ಸಂಗೀತಗ ಳನ್ನು ಹಾಡುವನು.
25:21b.PRO.025.021 ನಿನ್ನ ಶತ್ರು ಹಸಿದಿದ್ದರೆ ತಿನ್ನುವ ದಕ್ಕೆ ಅವನಿಗೆ ರೊಟ್ಟಿ ಕೊಡು; ಅವನು ಬಾಯಾರಿದ್ದರೆ ಕುಡಿಯುವದಕ್ಕೆ ನೀರು ಕೊಡು.
25:22b.PRO.025.022 ಅವನ ತಲೆಯ ಮೇಲೆ ಬೆಂಕಿಯ ಕೆಂಡಗಳನ್ನು ಹಾಕುವಿ; ಕರ್ತನು ನಿನಗೆ ಪ್ರತಿಫಲ ಕೊಡುವನು.
25:23b.PRO.025.023 ಉತ್ತರದ ಗಾಳಿಯು ಮಳೆಯನ್ನು ನೂಕುತ್ತದೆ; ಅದರಂತೆಯೇ ಚಾಡಿಯ ನಾಲಿಗೆ ಕೋಪದ ಮುಖ ಮಾಡುವದೆ.
25:24b.PRO.025.024 ವಿಶಾಲ ವಾದ ಮನೆಯಲ್ಲಿ ಜಗಳಗಂಟಿಯೊಂದಿಗೆ ಇರುವದ ಕ್ಕಿಂತ ಮಾಳಿಗೆಯ ಮೂಲೆಯಲ್ಲಿ ವಾಸಿಸುವದು ಲೇಸು.
25:25b.PRO.025.025 ಬಾಯಾರಿದವನಿಗೆ ತಣ್ಣೀರು ಹೇಗೋ ದೂರ ದೇಶ ದಿಂದ ಬಂದ ಒಳ್ಳೆಯ ಸಮಾಚಾರವು ಹಾಗೆಯೇ.
25:26b.PRO.025.026 ದುಷ್ಟರ ಮುಂದೆ ನೀತಿವಂತನು ಬೀಳುವದು, ಕದಲಿ ಸಲ್ಪಟ್ಟ ಬುಗ್ಗೆ, ಕೊಳಕಾದ ಒರತೆ ಇದ್ದಂತೆ.
25:27b.PRO.025.027 ಜೇನನ್ನು ಹೆಚ್ಚಾಗಿ ತಿನ್ನುವದು ಹಿತವಲ್ಲ; ಹಾಗೆಯೇ ಮನುಷ್ಯರು ಸ್ವಂತ ಗೌರವವನ್ನು ಹುಡುಕುವದು ಗೌರವವಲ್ಲ.ತನ್ನ ಸ್ವಂತ ಮನಸ್ಸನ್ನು ಆಳದಿರುವವನು ಮುರಿ ಯಲ್ಪಟ್ಟು ಬಿದ್ದುಹೋಗಿ, ಗೋಡೆಗಳಿಲ್ಲದ ಪಟ್ಟಣಕ್ಕೆ ಸಮಾನ.
25:28b.PRO.025.028 ತನ್ನ ಸ್ವಂತ ಮನಸ್ಸನ್ನು ಆಳದಿರುವವನು ಮುರಿ ಯಲ್ಪಟ್ಟು ಬಿದ್ದುಹೋಗಿ, ಗೋಡೆಗಳಿಲ್ಲದ ಪಟ್ಟಣಕ್ಕೆ ಸಮಾನ.
26
26:1b.PRO.026.001 ಬೇಸಿಗೆಯಲ್ಲಿ ಹಿಮದಂತೆಯೂ ಸುಗ್ಗಿಯಲ್ಲಿ ಮಳೆಯಂತೆಯೂ ಬುದ್ಧಿಹೀನನಿಗೆ ಮಾನ ವು ಸರಿಯಲ್ಲ.
26:2b.PRO.026.002 ಅಲೆದಾಡುವ ಪಕ್ಷಿಯಂತೆಯೂ ಹಾರಾ ಡುವ ಬಾನಕ್ಕಿಯಂತೆಯೂ ಕಾರಣವಿಲ್ಲದ ನಾಶವು ಬರುವದಿಲ್ಲ.
26:3b.PRO.026.003 ಕುದುರೆಗೆ ಬಾರುಗೋಲು, ಕತ್ತೆಗೆ ಕಡಿ ವಾಣ, ಮೂಢನ ಬೆನ್ನಿಗೆ ಬೆತ್ತ.
26:4b.PRO.026.004 ಮೂಢನ ಮೂರ್ಖ ತನಕ್ಕೆ ತಕ್ಕಂತೆ ಉತ್ತರಿಸಬೇಡ; ಇಲ್ಲವಾದರೆ ನೀನು ಅವನಿಗೆ ಸಮಾನನಾದೀಯೇ.
26:5b.PRO.026.005 ಮೂಢನ ಮೂರ್ಖ ತನಕ್ಕೆ ತಕ್ಕಂತೆ ಉತ್ತರಕೊಡು; ಇಲ್ಲವಾದರೆ ತನ್ನ ದೃಷ್ಟಿ ಯಲ್ಲಿ ಅವನು ಜ್ಞಾನಿಯಾದಾನು.
26:6b.PRO.026.006 ಬುದ್ಧಿಹೀನನ ಮೂಲಕ ವರ್ತಮಾನ ಕಳುಹಿಸುವವನು ಪಾದಗಳನ್ನು ಕಡಿದು ಕೇಡನ್ನು ಕುಡಿಯುತ್ತಾನೆ.
26:7b.PRO.026.007 ಕುಂಟನ ಕಾಲು ಗಳು ಸಮವಲ್ಲ; ಹಾಗೆಯೇ ಬುದ್ಧಿಹೀನರ ಬಾಯಲ್ಲಿ ಸಾಮ್ಯವು ಇರುತ್ತದೆ.
26:8b.PRO.026.008 ಕವಣಿಯಲ್ಲಿ ಕಲ್ಲನ್ನು ಕಟ್ಟುವವನ ಹಾಗೆಯೇ ಮೂಢನಿಗೆ ಮಾನಕೊಡುವವನು ಇರು ವನು.
26:9b.PRO.026.009 ಕುಡುಕನ ಕೈಯಲ್ಲಿ ಮುಳ್ಳು ಹೊಕ್ಕಂತೆ ಬುದ್ಧಿ ಹೀನರ ಬಾಯಲ್ಲಿ ಸಾಮ್ಯವು ಇರುವದು.
26:10b.PRO.026.010 ಎಲ್ಲವು ಗಳನ್ನು ನಿರ್ಮಿಸಿದ ಮಹಾ ದೇವರು ತಾನೇ ಮೂಢ ನಿಗೂ ಅಪರಾಧಿಗಳಿಗೂ ಪ್ರತಿಫಲ ಕೊಡುತ್ತಾನೆ.
26:11b.PRO.026.011 ತಾನು ಕಕ್ಕಿದ್ದಕ್ಕೆ ನಾಯಿಯು ತಿರುಗುವಂತೆ ಮೂಢನು ತನ್ನ ಮೂಢತನಕ್ಕೆ ಹಿಂದಿರುಗುತ್ತಾನೆ.
26:12b.PRO.026.012 ತನ್ನ ಸ್ವಂತ ಅಭಿಪ್ರಾಯದಲ್ಲಿ ಜ್ಞಾನಿಯಾದವನನ್ನು ನೀನು ನೋಡಿ ದ್ದೀಯೋ? ಅವನಿಗಿಂತ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯು ಇರುತ್ತದೆ,
26:13b.PRO.026.013 ಸೋಮಾರಿಯು --ದಾರಿಯಲ್ಲಿ ಸಿಂಹವಿದೆ, ಬೀದಿಗಳಲ್ಲಿ ಸಿಂಹ ಇದೆ ಎಂದು ಹೇಳುತ್ತಾನೆ.
26:14b.PRO.026.014 ಬಾಗಲು ತಿರುಗುಣಿಗಳ ಮೇಲೆ ಹೇಗೆ ತಿರುಗುತ್ತದೋ ಹಾಗೆಯೇ ಸೋಮಾರಿಯು ತನ್ನ ಹಾಸಿಗೆಯ ಮೇಲೆ ತಿರುಗುತ್ತಾನೆ.
26:15b.PRO.026.015 ಸೋಮಾ ರಿಯು ಎದೆಯಲ್ಲಿ ತನ್ನ ಕೈಯನ್ನು ಮುಚ್ಚಿಕೊಳ್ಳುತ್ತಾನೆ; ತಿರುಗಿ ಅದನ್ನು ತನ್ನ ಬಾಯಿಯ ಹತ್ತಿರ ತರುವದಕ್ಕೆ ಕೊರಗುತ್ತಾನೆ.
26:16b.PRO.026.016 ತನ್ನ ಸ್ವಂತ ಅಭಿಪ್ರಾಯವುಳ್ಳ ಸೋಮಾರಿಯು ನೆವ ಹೇಳುವ ಏಳು ಮಂದಿಗಿಂತ ಜಾಣನಾಗಿದ್ದಾನೆ.
26:17b.PRO.026.017 ಹಾದು ಹೋಗುತ್ತಾ ತನ್ನದಾಗ ದಿರುವ ವ್ಯಾಜ್ಯದಲ್ಲಿ ತಲೆಹಾಕುವವನು ಕಿವಿಹಿಡಿದು ನಾಯಿಯನ್ನು ತೆಗೆದುಕೊಂಡು ಹೋಗುವವನಂತೆ ಇದ್ದಾನೆ.
26:18b.PRO.026.018 ನೆರೆಯವನನ್ನು ಮೋಸಗೊಳಿಸಿ ತಮಾಷೆ ಗೋಸ್ಕರ ಮಾಡಿದೆನಲ್ಲಾ ಎನ್ನುವವನು--
26:19b.PRO.026.019 ಕೊಳ್ಳಿ ಗಳನ್ನೂ ಅಂಬುಗಳನ್ನೂ ಸಾವನ್ನೂ ಬೀರುವ ದೊಡ್ಡ ಹುಚ್ಚನ ಹಾಗೆ.
26:20b.PRO.026.020 ಕಟ್ಟಿಗೆ ಇಲ್ಲದಿರುವಲ್ಲಿ ಬೆಂಕಿಯು ಆರಿ ಹೋಗುತ್ತದೆ--ಹಾಗಯೇ ಚಾಡಿಕೋರನು ಇಲ್ಲ ದಿರುವಲ್ಲಿ ಜಗಳ ಶಮನವಾಗುವದು.
26:21b.PRO.026.021 ಕೆಂಡಗಳಿಗೆ ಇದ್ದಲು, ಬೆಂಕಿಗೆ ಕಟ್ಟಿಗೆ; ಹಾಗೆಯೇ ಜಗಳವನ್ನು ಕೆರಳಿಸುವಂತೆ ಕಲಹಮಾಡುವವನು ಇರುವನು.
26:22b.PRO.026.022 ಚಾಡಿಕೋರನ ಮಾತುಗಳು ಗಾಯಗಳ ಹಾಗೆ ಹೊಟ್ಟೆಯೊಳಕ್ಕೆ ಇಳಿಯುತ್ತವೆ.
26:23b.PRO.026.023 ಉರಿಯುವ ತುಟಿ ಗಳೂ ಕೆಟ್ಟಹೃದಯವೂ ಬೆಳ್ಳಿಯ ಕಿಟ್ಟದಿಂದ ಮುಚ್ಚ ಲ್ಪಟ್ಟ ಬೋಕಿಯಂತೆ ಇದೆ.
26:24b.PRO.026.024 ಹಗೆಮಾಡುವವನು ತನ್ನ ತುಟಿಗಳಿಂದ ಮೋಸವನ್ನು ನಟಿಸುತ್ತಾನೆ, ತನ್ನ ಅಂತರಂಗದಲ್ಲಿ ಮೋಸವನ್ನು ಇಟ್ಟುಕೊಳ್ಳುತ್ತಾನೆ.
26:25b.PRO.026.025 ಸವಿ ಮಾತನ್ನಾಡಿದರೆ ಅವನನ್ನು ನಂಬಬೇಡ; ಅವನ ಹೃದಯದಲ್ಲಿ ಏಳು ಅಸಹ್ಯಗಳಿವೆ.
26:26b.PRO.026.026 ಯಾವನ ಹಗೆ ತನವು ಮೋಸದಿಂದ ಮುಚ್ಚಲ್ಪಟ್ಟಿದೆಯೋ ಅವನ ಕೆಟ್ಟತನವು ಸಭೆಯಲ್ಲಿ ಬಯಲಾಗುವದು.
26:27b.PRO.026.027 ಗುಂಡಿ ಯನ್ನು ತೋಡುವವನು ತಾನೇ ಅದರಲ್ಲಿ ಬೀಳುತ್ತಾನೆ; ಕಲ್ಲು ಹೊರಳಿಸುವವನ ಮೇಲೆಯೇ ಅದು ತಿರಿಗಿ ಹೊರಳುವದು.ಸುಳ್ಳು ನಾಲಿಗೆಯಿಂದ ಬಾಧಿಸಲ್ಪ ಟ್ಟವರನ್ನೇ ಅದು ಹಗೆಮಾಡುವದು; ಮುಖಸ್ತುತಿ ಮಾಡುವ ಬಾಯಿಯು ನಾಶನವನ್ನುಂಟುಮಾಡುತ್ತದೆ.
26:28b.PRO.026.028 ಸುಳ್ಳು ನಾಲಿಗೆಯಿಂದ ಬಾಧಿಸಲ್ಪ ಟ್ಟವರನ್ನೇ ಅದು ಹಗೆಮಾಡುವದು; ಮುಖಸ್ತುತಿ ಮಾಡುವ ಬಾಯಿಯು ನಾಶನವನ್ನುಂಟುಮಾಡುತ್ತದೆ.
27
27:1b.PRO.027.001 ನಾಳೆಯ ವಿಷಯವಾಗಿ ಕೊಚ್ಚಿಕೊಳ್ಳಬೇಡ; ಒಂದು ದಿನವು ಯಾವದನ್ನು ಸಂಭವಿಸುವಂತೆ ಮಾಡುತ್ತದೋ ಅದು ನಿನಗೆ ತಿಳಿ ಯದು.
27:2b.PRO.027.002 ನಿನ್ನ ಸ್ವಂತ ಬಾಯಲ್ಲ, ಮತ್ತೊಬ್ಬನು ನಿನ್ನನ್ನು ಹೊಗಳಲಿ; ನಿನ್ನ ಸ್ವಂತ ತುಟಿಗಳಲ್ಲ, ಪರನೇ ನಿನ್ನನ್ನು ಹೊಗಳಲಿ.
27:3b.PRO.027.003 ಕಲ್ಲು ಭಾರ, ಮರಳು ಭಾರ; ಇವೆರಡ ಕ್ಕಿಂತ ಮೂಢನ ಕೋಪವು ಬಹಳ ಭಾರ.
27:4b.PRO.027.004 ಕ್ರೋಧವು ಕ್ರೂರ. ಕೋಪವು ಘೋರ; ಮತ್ಸರದ ಮುಂದೆ ಯಾವನು ನಿಂತಾನು?
27:5b.PRO.027.005 ರಹಸ್ಯವಾದ ಪ್ರೀತಿಗಿಂತಲೂ ಬಹಿರಂಗವಾದ ಗದರಿಕೆಯೇ ಲೇಸು.
27:6b.PRO.027.006 ಸ್ನೇಹಿತನು ಮಾಡುವ ಗಾಯಗಳು ನಂಬಿಕೆಯುಳ್ಳವುಗಳಾಗಿವೆ; ಶತ್ರುವಿನ ಮುದ್ದುಗಳು ಮೋಸಕರವಾಗಿವೆ.
27:7b.PRO.027.007 ತೃಪ್ತಿ ಹೊಂದಿದವನು ಜೇನು ತುಪ್ಪವನ್ನೂ ಅಸಹ್ಯಿಸಿಕೊಳ್ಳು ತ್ತಾನೆ; ಹಸಿದವನಿಗೆ ಕಹಿಯಾದ ಪ್ರತಿಯೊಂದು ವಸ್ತುವು ಸಿಹಿಯಾಗಿದೆ.
27:8b.PRO.027.008 ತನ್ನ ಸ್ಥಳವನ್ನು ಬಿಟ್ಟು ಅಲೆಯುವ ಮನುಷ್ಯನು ತನ್ನ ಗೂಡನ್ನು ಬಿಟ್ಟು ಅಲೆಯುವ ಪಕ್ಷಿ ಯಂತೆ ಇದ್ದಾನೆ.
27:9b.PRO.027.009 ತೈಲವೂ ಸುಗಂಧ ದ್ರವ್ಯವೂ ಹೃದಯವನ್ನು ಸಂತೋಷಪಡಿಸುತ್ತದೆ, ಹಾಗೆಯೇ ಆದರಣೆಯ ಸಲಹೆಯಿಂದ ಸ್ನೇಹಿತನ ಮಧುರತ್ವವು ಇರುತ್ತದೆ.
27:10b.PRO.027.010 ನಿನ್ನ ಸ್ನೇಹಿತನನ್ನೂ ನಿನ್ನ ತಂದೆಯ ಸ್ನೇಹಿತನನ್ನೂ ತ್ಯಜಿಸಬೇಡ; ಅಲ್ಲದೆ ನಿನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನ ಸಹೋದರನ ಮನೆಗೆ ಹೋಗಬೇಡ; ದೂರವಾಗಿರುವ ಸಹೋದರನಿಗಿಂತ ಹತ್ತಿರವಾಗಿರುವ ನೆರೆಯವನೇ ಲೇಸು.
27:11b.PRO.027.011 ನಿನ್ನನ್ನು ನಿಂದಿಸುವವರಿಗೆ ಉತ್ತರಿಸುವಂತೆ ನಿನ್ನ ಹೃದಯವನ್ನು ಸಂತೋಷಪಡಿಸುವ ಹಾಗೆ ನನ್ನ ಮಗನೇ, ಜ್ಞಾನಿಯಾಗಿರು.
27:12b.PRO.027.012 ಜಾಣನು ಕೇಡನ್ನು ಮುಂದಾಗಿ ನೋಡಿ ಅಡಗಿಕೊಳ್ಳುತ್ತಾನೆ; ಬುದ್ಧಿಹೀನನು ಮುಂದೆ ಹೋಗಿ ಶಿಕ್ಷಿಸಲ್ಪಡುತ್ತಾನೆ.
27:13b.PRO.027.013 ಪರನಿಗಾಗಿ ಹೊಣೆಯಾದವನ ವಸ್ತ್ರವನ್ನು ತೆಗೆದು ಕೊಂಡು ಮತ್ತೊಬ್ಬನಿಗಾಗಿ ಅವನಿಂದ ಒತ್ತೆಯನ್ನು ತೆಗೆದುಕೋ.
27:14b.PRO.027.014 ಮುಂಜಾನೆ ಎದ್ದು ತನ್ನ ಸ್ನೇಹಿತನನ್ನು ದೊಡ್ಡ ಕೂಗಿನಿಂದ ಆಶೀರ್ವದಿಸುವವನಿಗೆ ಅದು ಶಾಪವೆಂದು ಎಣಿಸಲ್ಪಡುವದು.
27:15b.PRO.027.015 ದೊಡ್ಡ ಮಳೆಯ ದಿವಸದಲ್ಲಿ ಬಿಡದೆ ತೊಟ್ಟಿಕ್ಕುವಂತದ್ದೂ ಕಲಹ ಮಾಡುವ ಸ್ತ್ರೀಯೂ ಸಮಾನ.
27:16b.PRO.027.016 ಅವಳನ್ನು ಅಡಗಿಸು ವವನು ಗಾಳಿಯನ್ನೂ ತನ್ನನ್ನು ರಟ್ಟುಮಾಡುವ ಅವನ ಬಲಗೈಯ ತೈಲವನ್ನೂ ಅಡಗಿಸುತ್ತಾನೆ.
27:17b.PRO.027.017 ಕಬ್ಬಿಣವು ಕಬ್ಬಿಣವನ್ನು ಹದಮಾಡುತ್ತದೆ; ಹಾಗೆಯೇ ಒಬ್ಬನು ತನ್ನ ಸ್ನೇಹಿತನ ಬುದ್ಧಿಯನ್ನು ಚುರುಕು ಮಾಡುತ್ತಾನೆ.
27:18b.PRO.027.018 ಅಂಜೂರದ ಮರವನ್ನು ಕಾಯುವವನು ಅದರ ಫಲವನ್ನು ತಿನ್ನುವನು; ಹಾಗೆಯೇ ತನ್ನ ಯಜಮಾನ ನಿಗಾಗಿ ಕಾಯುವವನು ಸನ್ಮಾನ ಹೊಂದುವನು.
27:19b.PRO.027.019 ನೀರಿನಲ್ಲಿ ಮುಖವು ಪ್ರತಿಬಿಂಬಿಸುವಂತೆ ಮನುಷ್ಯನ ಹೃದಯವು ಮಾಡುತ್ತದೆ.
27:20b.PRO.027.020 ಪಾತಾಳಕ್ಕೂ ನಾಶನಕ್ಕೂ ತೃಪ್ತಿ ಇಲ್ಲವೇ ಇಲ್ಲ; ಹಾಗೆಯೇ ಮನುಷ್ಯ ಕಣ್ಣುಗಳು ಎಂದಿಗೂ ತೃಪ್ತಿಹೊಂದುವದಿಲ್ಲ.
27:21b.PRO.027.021 ಬೆಳ್ಳಿ ಬಂಗಾರ ಗಳ ಪುಟಕ್ಕೆ ಕುಲುಮೆ ಹೇಗೆಯೋ ಹಾಗೆಯೇ ತನ್ನ ಹೊಗಳಿಕೆಗೆ ಮನುಷ್ಯನಿದ್ದಾನೆ.
27:22b.PRO.027.022 ಬುದ್ಧಿಹೀನನನ್ನು ಒರಳಿನಲ್ಲಿ ಗೋಧಿಯೊಂದಿಗೆ ಒನಕೆಯಿಂದ ಕುಟ್ಟಿ ದರೂ ಅವನಿಂದ ಮೂರ್ಖತನವು ತೊಲಗುವದಿಲ್ಲ.
27:23b.PRO.027.023 ನಿನ್ನ ಹಿಂಡುಗಳ ಸ್ಥಿತಿಯನ್ನು ತಿಳಿದುಕೊಳ್ಳುವಂತೆ ಶ್ರದ್ಧೆವಹಿಸು; ನಿನ್ನ ಮಂದೆಗಳನ್ನು ಚೆನ್ನಾಗಿ ನೋಡಿಕೋ.
27:24b.PRO.027.024 ಐಶ್ವರ್ಯವು ಶಾಶ್ವತವಲ್ಲ; ಕಿರೀಟವು ಪ್ರತಿಯೊಂದು ವಂಶಾವಳಿಗೆ ಇರುತ್ತದೋ?
27:25b.PRO.027.025 ಹುಲ್ಲು ಕಾಣುತ್ತದೆ; ಹಸಿ ಹುಲ್ಲು ತನ್ನನ್ನೇ ತೋರುತ್ತದೆ, ಬೆಟ್ಟಗಳ ಸೊಪ್ಪು ಕೂಡಿಸಲ್ಪಡುತ್ತದೆ.
27:26b.PRO.027.026 ನಿನ್ನ ವಸ್ತ್ರಕ್ಕಾಗಿ ಕುರಿಮರಿಗಳು ಮತ್ತು ಹೊಲದ ಕ್ರಯಕ್ಕಾಗಿ ನಿನ್ನ ಆಡುಗಳು ಇವೆ.ನಿನ್ನ ಊಟಕ್ಕಾಗಿಯೂ ನಿನ್ನ ಮನೆಯವರ ಆಹಾರ ಕ್ಕಾಗಿಯೂ ನಿನ್ನ ದಾಸಿಯರ ಜೀವನಕ್ಕಾಗಿಯೂ ಆಡುಗಳ ಹಾಲು ಸಾಕಾಗುತ್ತದೆ.
27:27b.PRO.027.027 ನಿನ್ನ ಊಟಕ್ಕಾಗಿಯೂ ನಿನ್ನ ಮನೆಯವರ ಆಹಾರ ಕ್ಕಾಗಿಯೂ ನಿನ್ನ ದಾಸಿಯರ ಜೀವನಕ್ಕಾಗಿಯೂ ಆಡುಗಳ ಹಾಲು ಸಾಕಾಗುತ್ತದೆ.
28
28:1b.PRO.028.001 ಹಿಂದಟ್ಟುವವನು ಇಲ್ಲದಿದ್ದರೂ ದುಷ್ಟರು ಓಡಿಹೋಗುತ್ತಾರೆ; ಸಿಂಹದ ಹಾಗೆ ನೀತಿವಂತರು ಧೈರ್ಯದಿಂದ ಇರುತ್ತಾರೆ.
28:2b.PRO.028.002 ದೇಶದ ದೋಷಕ್ಕಾಗಿ ಅನೇಕ ಪ್ರಭುಗಳು ಇರುತ್ತಾರೆ; ಆದರೆ ಮನುಷ್ಯನ ವಿವೇಕದಿಂದಲೂ ತಿಳುವಳಿಕೆಯಿಂದಲೂ ಅದರ ಸ್ಥಿತಿಯು ವಿಸ್ತರಿಸುತ್ತದೆ.
28:3b.PRO.028.003 ಬಡವರನ್ನು ಹಿಂಸಿಸುವ ದರಿದ್ರನು ಆಹಾರವನ್ನು ಉಳಿಸದಂತೆ ಸುರಿಯುವ ಮಳೆಯಂತಿದ್ದಾನೆ.
28:4b.PRO.028.004 ಕಟ್ಟಳೆಯನ್ನು ತ್ಯಜಿಸುವವನು ದುಷ್ಟರನ್ನು ಹೊಗಳುತ್ತಾನೆ; ಕಟ್ಟಳೆಯನ್ನು ಕೈಕೊಳ್ಳು ವವರು ಅವರೊಂದಿಗೆ ಹೋರಾಡುತ್ತಾರೆ.
28:5b.PRO.028.005 ನ್ಯಾಯ ತೀರ್ಪನ್ನು ದುಷ್ಟರು ಗ್ರಹಿಸುವದಿಲ್ಲ; ಕರ್ತನನ್ನು ಹುಡುಕುವವರು ಎಲ್ಲವುಗಳನ್ನು ಗ್ರಹಿಸುತ್ತಾರೆ.
28:6b.PRO.028.006 ಐಶ್ವರ್ಯವಂತನಾಗಿದ್ದರೂ ತನ್ನ ಮಾರ್ಗದಲ್ಲಿ ವಕ್ರ ವಾಗಿರುವವನಿಗಿಂತ ತನ್ನ ಯಥಾರ್ಥತೆಯಲ್ಲಿ ನಡೆ ಯುವ ದರಿದ್ರನು ಶ್ರೇಷ್ಠನು.
28:7b.PRO.028.007 ಕಟ್ಟಳೆಯನ್ನು ಕೈಕೊಳ್ಳು ವವನು ಜ್ಞಾನಿಯಾದ ಮಗನು; ದುಂದುಗಾರ ಸಂಗ ಡಿಗನು ತನ್ನ ತಂದೆಯನ್ನು ಅವಮಾನಪಡಿಸುತ್ತಾನೆ.
28:8b.PRO.028.008 ಬಡ್ಡಿಯಿಂದಲೂ ಅನ್ಯಾಯದ ಲಾಭದಿಂದಲೂ ತನ್ನ ಆಸ್ತಿಯನ್ನು ವೃದ್ಧಿಗೊಳಿಸುವವನು ಬಡವರ ಮೇಲೆ ದಯೆತೋರಿಸುವವನಿಗೆ ಅದನ್ನು ಕೂಡಿಸುವನು.
28:9b.PRO.028.009 ನ್ಯಾಯಪ್ರಮಾಣವನ್ನು ಕೇಳದೆ ತನ್ನ ಕಿವಿಯನ್ನು ತಿರುಗಿಸಿಕೊಳ್ಳುವವನ ಪ್ರಾರ್ಥನೆಯು ಅಸಹ್ಯ.
28:10b.PRO.028.010 ದುರ್ಮಾರ್ಗದಲ್ಲಿ ನೀತಿವಂತರನ್ನು ದಾರಿತಪ್ಪಿಸು ವವನು ತಾನೇ ತನ್ನ ಸ್ವಂತ ಕುಣಿಯೊಳಕ್ಕೆ ಬೀಳುವನು; ಯಥಾರ್ಥವಂತರಿಗಾದರೋ ಒಳ್ಳೆಯವುಗಳು ಸೊತ್ತಾ ಗುವವು.
28:11b.PRO.028.011 ತನ್ನ ಸ್ವಂತ ಅಭಿಪ್ರಾಯದಲ್ಲಿ ಐಶ್ವರ್ಯ ವಂತನು ಜ್ಞಾನಿಯಾಗಿದ್ದಾನೆ; ವಿವೇಕಿಯಾದ ಬಡವನು ಅವನನ್ನು ಪರೀಕ್ಷಿಸುತ್ತಾನೆ.
28:12b.PRO.028.012 ನೀತಿವಂತರು ಉಲ್ಲಾಸಿಸಿ ದರೆ ದೊಡ್ಡ ಘನತೆ ಇರುವದು; ದುಷ್ಟರಿಗೆ ಏಳಿಗೆ ಯಾದರೆ ಮನುಷ್ಯನು ಅಡಗಿಕೊಳ್ಳುತ್ತಾನೆ.
28:13b.PRO.028.013 ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನು ವೃದ್ಧಿಯಾಗನು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನು ಕರುಣೆ ಹೊಂದುವನು.
28:14b.PRO.028.014 ಯಾವಾಗಲೂ ಭಯದಿಂದ ಇರು ವವನು ಧನ್ಯನು; ತನ್ನ ಹೃದಯವನ್ನು ಕಠಿಣಪಡಿಸಿ ಕೊಳ್ಳುವವನು ಕೇಡಿಗೆ ಸಿಕ್ಕಿಬೀಳುವನು.
28:15b.PRO.028.015 ಗರ್ಜಿಸುವ ಸಿಂಹದಂತೆಯೂ ಅಲೆದಾಡುವ ಕರಡಿಯಂತೆಯೂ ಬಡವರಾದ ಜನರನ್ನು ಆಳುವ ದುಷ್ಟನು ಇರುತ್ತಾನೆ.
28:16b.PRO.028.016 ವಿವೇಕ ಶೂನ್ಯನಾದ ಒಡೆಯನು ಮಹಾಹಿಂಸಕನು; ಲೋಭತನವನ್ನು ಹಗೆಮಾಡುವವನು ತನ್ನ ದಿನಗಳನ್ನು ದೀರ್ಘಮಾಡುತ್ತಾನೆ.
28:17b.PRO.028.017 ಒಬ್ಬ ಮನುಷ್ಯನ ರಕ್ತಕ್ಕೆ ಬಲಾತ್ಕಾರ ಮಾಡುವವನು ಕುಣಿಗೆ ಹಾರುವನು; ಅವನನ್ನು ಯಾವನೂ ತಡೆಯದಿರಲಿ.
28:18b.PRO.028.018 ಯಥಾರ್ಥ ವಾಗಿ ನಡೆಯುವವನು ರಕ್ಷಿಸಲ್ಪಡುವನು; ತನ್ನ ಮಾರ್ಗ ಗಳಲ್ಲಿ ವಕ್ರವಾಗಿ ನಡೆದುಕೊಳ್ಳುವವನು ತಟ್ಟನೆ ಬೀಳು ವನು.
28:19b.PRO.028.019 ತನ್ನ ಭೂಮಿಯನ್ನು ವ್ಯವಸಾಯ ಮಾಡುವ ವನಿಗೆ ಸಮೃದ್ಧಿಯಾದ ರೊಟ್ಟಿ ಇರುವದು; ಆದರೆ ವ್ಯರ್ಥ ಜನರನ್ನು ಹಿಂಬಾಲಿಸುವವನಿಗೆ ಸಾಕಾದಷ್ಟು ಬಡತನವು ಇರುವದು.
28:20b.PRO.028.020 ನಂಬಿಗಸ್ತನಾದ ಮನು ಷ್ಯನು ಆಶೀರ್ವಾದಗಳಲ್ಲಿ ತುಂಬಿತುಳುಕುವನು; ಆದರೆ ಧನವಂತನಾಗಲು ಆತುರಪಡುವವನು ನಿರ್ದೋಷಿ ಯಾಗಿರುವದಿಲ್ಲ.
28:21b.PRO.028.021 ಪಕ್ಷಪಾತವು ಸರಿಯಲ್ಲ; ತುತ್ತು ರೊಟ್ಟಿಗಾಗಿ ಒಬ್ಬನು ದ್ರೋಹಮಾಡುವನು.
28:22b.PRO.028.022 ಧನ ವಂತನಾಗಲು ಆತುರಪಡುವವನು ಕೆಟ್ಟ ಕಣ್ಣುಳ್ಳವ ನಾಗಿದ್ದಾನೆ; ತನಗೆ ಬಡತನವು ಬರುವದನ್ನು ಅವನು ಯೋಚಿಸುವದಿಲ್ಲ.
28:23b.PRO.028.023 ತನ್ನ ನಾಲಿಗೆಯಿಂದ ಮುಖಸ್ತುತಿ ಮಾಡುವವನಿಗಿಂತ ಒಬ್ಬನನ್ನು ಗದರಿಸುವವನು ತರುವಾಯ ಹೆಚ್ಚು ದಯಾಪಾತ್ರನಾಗುವನು.
28:24b.PRO.028.024 ತನ್ನ ತಂದೆ ತಾಯಿಯನ್ನಾಗಲಿ ದೋಚಿಕೊಂಡು--ಇದು ದೋಷವಲ್ಲ ಎಂದು ಹೇಳುವವನು ಕೆಡುಕನಿಗೆ ಜೊತೆಗಾರನು.
28:25b.PRO.028.025 ಗರ್ವದ ಹೃದಯವುಳ್ಳವನು ಕಲಹ ವನ್ನೆಬ್ಬಿಸುವನು; ಕರ್ತನಲ್ಲಿ ಭರವಸವಿಡುವವನು ಪುಷ್ಟ ನಾಗುವನು.
28:26b.PRO.028.026 ತನ್ನ ಹೃದಯದಲ್ಲಿಯೇ ಭರವಸವಿ ಡುವವನು ಬುದ್ಧಿಹೀನನು; ಜ್ಞಾನದಿಂದ ನಡೆಯುವ ವನು ತಪ್ಪಿಸಿಕೊಳ್ಳುವನು.
28:27b.PRO.028.027 ಬಡವರಿಗೆ ದಾನಮಾಡು ವವರು ಕೊರತೆಪಡುವದಿಲ್ಲ; ತನ್ನ ಕಣ್ಣುಗಳನ್ನು ಮುಚ್ಚಿ ಕೊಳ್ಳುವವನಿಗೆ ಅನೇಕ ಶಾಪಗಳು.ದುಷ್ಟರು ಎದ್ದರೆ ಜನರು ಅಡಗಿಕೊಳ್ಳುತ್ತಾರೆ. ಅವರು ನಾಶ ವಾದರೆ ನೀತಿವಂತರು ವೃದ್ಧಿಯಾಗುತ್ತಾರೆ.
28:28b.PRO.028.028 ದುಷ್ಟರು ಎದ್ದರೆ ಜನರು ಅಡಗಿಕೊಳ್ಳುತ್ತಾರೆ. ಅವರು ನಾಶ ವಾದರೆ ನೀತಿವಂತರು ವೃದ್ಧಿಯಾಗುತ್ತಾರೆ.
29
29:1b.PRO.029.001 ಅನೇಕ ಸಲ ಗದರಿಸಲ್ಪಟ್ಟರೂ ಬಗ್ಗದಕುತ್ತಿಗೆಯವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.
29:2b.PRO.029.002 ನೀತಿವಂತರು ಅಧಿಕಾರದಲ್ಲಿ ದ್ದಾಗ ಜನರು ಹರ್ಷಿಸುತ್ತಾರೆ; ದುಷ್ಟನು ಆಳಿದರೆ ಜನರು ಶೋಕಿಸುತ್ತಾರೆ.
29:3b.PRO.029.003 ಜ್ಞಾನವನ್ನು ಪ್ರೀತಿಸುವವನು ತನ್ನ ತಂದೆಯನ್ನು ಹರ್ಷಗೊಳಿಸುತ್ತಾನೆ; ವೇಶ್ಯೆಯ ರೊಂದಿಗೆ ಸಹವಾಸ ಮಾಡುವವನು ತನ್ನ ಆಸ್ತಿಯನ್ನು ವೆಚ್ಚಮಾಡುತ್ತಾನೆ.
29:4b.PRO.029.004 ನ್ಯಾಯತೀರ್ಪಿನಿಂದ ಅರಸನು ದೇಶವನ್ನು ಸ್ಥಿರಗೊಳಿಸುತ್ತಾನೆ; ಲಂಚಗಳನ್ನು ಸ್ವೀಕರಿಸು ವವನು ಅದನ್ನು ಕೆಡವಿಹಾಕುತ್ತಾನೆ.
29:5b.PRO.029.005 ತನ್ನ ನೆರೆಯವ ನನ್ನು ಮುಖಸ್ತುತಿ ಮಾಡುವವನು ಅವನ ಪಾದಗಳಿಗೆ ಬಲೆಯನ್ನು ಒಡ್ಡುತ್ತಾನೆ.
29:6b.PRO.029.006 ಕೆಟ್ಟವನ ದೋಷದಲ್ಲಿ ಉರ್ಲು ಇದೆ; ನೀತಿವಂತನು ಹಾಡಿ ಹರ್ಷಿಸುತ್ತಾನೆ.
29:7b.PRO.029.007 ಬಡವರ ನಿಮಿತ್ತ ನೀತಿವಂತನು ಯೋಚಿಸುತ್ತಾನೆ; ದುಷ್ಟನು ಅದನ್ನು ತಿಳುಕೊಳ್ಳುವಂತೆ ಲಕ್ಷ್ಯಕ್ಕೆ ತರುವ ದಿಲ್ಲ.
29:8b.PRO.029.008 ಪರಿಹಾಸ್ಯಗಾರರು ಪಟ್ಟಣಕ್ಕೆ ಉರ್ಲನ್ನು ಒಡ್ಡು ತ್ತಾರೆ; ಜ್ಞಾನಿಗಳು ಕೋಪವನ್ನು ತಿರುಗಿಸುವರು.
29:9b.PRO.029.009 ಜ್ಞಾನಿಯು ಬುದ್ಧಿಹೀನನೊಂದಿಗೆ ವ್ಯಾಜ್ಯ ಮಾಡಿ ದರೆ ಅವನು ರೇಗಿದರೂ ನಕ್ಕರೂ ಶಮನವಾಗುವು ದಿಲ್ಲ.
29:10b.PRO.029.010 ಕೊಲೆಪಾತಕರು ನೀತಿವಂತರನ್ನು ದ್ವೇಷಿಸು ತ್ತಾರೆ; ಯಥಾರ್ಥವಂತರು ಅವನ ಪ್ರಾಣವನ್ನು ಹುಡು ಕುತ್ತಾರೆ.
29:11b.PRO.029.011 ಮೂಢನು ತನ್ನ ಮನಸ್ಸನ್ನೆಲ್ಲಾ ಹೊರ ಪಡಿಸುತ್ತಾನೆ; ಜ್ಞಾನಿಯು ಅದನ್ನು ಕಾಯುತ್ತಾನೆ.
29:12b.PRO.029.012 ಸುಳ್ಳಿಗೆ ಕಿವಿಗೊಡುವ ಅಧಿಕಾರಿಗೆ ಕಿವಿಗೊಟ್ಟರೆ ಅವನ ಸೇವಕರೆಲ್ಲರೂ ದುಷ್ಟರೇ.
29:13b.PRO.029.013 ಬಡವರೂ ಮೋಸಗಾರರೂ ಒಟ್ಟಾಗಿ ಸಂಧಿಸುತ್ತಾರೆ; ಕರ್ತನು ಅವರಿಬ್ಬರ ಕಣ್ಣುಗಳನ್ನು ಬೆಳಗಿಸುತ್ತಾನೆ.
29:14b.PRO.029.014 ಬಡವರಿಗೆ ನಂಬಿಕೆಯಿಂದ ನ್ಯಾಯತೀರಿಸುವ ಅರಸನ ಸಿಂಹಾ ಸನವು ಎಂದೆಂದಿಗೂ ಸ್ಥಿರಗೊಳ್ಳುವದು.
29:15b.PRO.029.015 ಬೆತ್ತ ಬೆದ ರಿಕೆಗಳು ಜ್ಞಾನವನ್ನುಂಟುಮಾಡುತ್ತವೆ; ಶಿಕ್ಷಿಸದೆ ಬಿಟ್ಟ ಹುಡುಗನು ತನ್ನ ತಾಯಿಗೆ ಅವಮಾನವನ್ನು ತರುತ್ತಾನೆ.
29:16b.PRO.029.016 ದುಷ್ಟರು ವೃದ್ಧಿಯಾದಾಗ ದೋಷವು ಹೆಚ್ಚುತ್ತದೆ; ನೀತಿವಂತರು ಅವರ ಬೀಳುವಿಕೆಯನ್ನು ಕಣ್ಣಾರೆ ನೋಡುವರು.
29:17b.PRO.029.017 ನಿನ್ನ ಮಗನನ್ನು ಶಿಕ್ಷಿಸಿದರೆ ಅವ ನಿಂದ ನಿನಗೆ ನೆಮ್ಮದಿಯಾಗುವದು; ಹೌದು, ಅವನು ನಿನ್ನ ಪ್ರಾಣಕ್ಕೆ ಆನಂದವನ್ನುಂಟು ಮಾಡುವನು.
29:18b.PRO.029.018 ದರ್ಶನವಿಲ್ಲದಿರುವಲ್ಲಿ ಜನರು ನಾಶವಾಗುತ್ತಾರೆ; ನ್ಯಾಯಪ್ರಮಾಣವನ್ನು ಕೈಕೊಳ್ಳುವವನು ಧನ್ಯನು.
29:19b.PRO.029.019 ಮಾತುಗಳಿಂದ ಸೇವಕನು ಶಿಕ್ಷಿಸಲ್ಪಡುವದಿಲ್ಲ; ಅವನು ತಿಳಿದುಕೊಂಡರೂ ಉತ್ತರಿಸುವದಿಲ್ಲ.
29:20b.PRO.029.020 ತನ್ನ ಮಾತುಗಳಲ್ಲಿ ದುಡುಕುವವನನ್ನು ನೀನು ನೋಡಿದ್ದೀಯೋ? ಅವನಿಗಿಂತಲೂ ಬುದ್ದಿಹೀನನ ವಿಷಯ ದಲ್ಲಿ ಹೆಚ್ಚು ನಿರೀಕ್ಷೆ ಇದೆ.
29:21b.PRO.029.021 ಬಾಲ್ಯದಿಂದ ತನ್ನ ಸೇವಕನನ್ನು ಕೋಮಲವಾಗಿ ಸಾಕುವವನು ತರುವಾಯ ತನಗೆ ಮಗನಂತೆ ಆಗುವನು.
29:22b.PRO.029.022 ಕೋಪಿಷ್ಠನು ಜಗಳ ವನ್ನೆಬ್ಬಿಸುತ್ತಾನೆ; ರೋಷಗೊಂಡವನು ದೋಷದಲ್ಲಿ ತುಂಬಿರುತ್ತಾನೆ.
29:23b.PRO.029.023 ಮನುಷ್ಯನ ಗರ್ವವು ತನ್ನನ್ನು ಹೀನಸ್ಥಿತಿಗೆ ತರುವದು; ಆತ್ಮದಲ್ಲಿ ದೀನರಾಗಿರುವವರು ಸನ್ಮಾನಹೊಂದುವರು.
29:24b.PRO.029.024 ಕಳ್ಳರೊಂದಿಗೆ ಪಾಲು ಗಾರನು ತನ್ನನ್ನು ತಾನೇ ಹಗೆಮಾಡುತ್ತಾನೆ; ಅವನು ಶಾಪವನ್ನು ಕೇಳಿತಿಳಿಸುವದಿಲ್ಲ.
29:25b.PRO.029.025 ಮನುಷ್ಯನ ಭಯವು ಉರುಲನ್ನು ತರುತ್ತದೆ; ಕರ್ತನಲ್ಲಿ ಭರವಸ ವಿಡುವವನು ಕ್ಷೇಮದಿಂದಿರುವನು.
29:26b.PRO.029.026 ಅನೇಕರು ಅಧಿ ಪತಿಯ ದಯೆಯನ್ನು ಹುಡುಕುತ್ತಾರೆ; ಕರ್ತನಿಂದಲೇ ಪ್ರತಿಯೊಬ್ಬನ ನ್ಯಾಯತೀರ್ಪು ಬರುತ್ತದೆ.ಅನೀತಿ ವಂತನು ನೀತಿವಂತರಿಗೆ ಅಸಹ್ಯ; ತನ್ನ ಮಾರ್ಗದಲ್ಲಿ ಯಥಾರ್ಥವಾಗಿರುವವನು ದುಷ್ಟರಿಗೆ ಅಸಹ್ಯ.
29:27b.PRO.029.027 ಅನೀತಿ ವಂತನು ನೀತಿವಂತರಿಗೆ ಅಸಹ್ಯ; ತನ್ನ ಮಾರ್ಗದಲ್ಲಿ ಯಥಾರ್ಥವಾಗಿರುವವನು ದುಷ್ಟರಿಗೆ ಅಸಹ್ಯ.
30
30:1b.PRO.030.001 ಯಾಕೆ ಎಂಬವನ ಮಗನಾದ ಆಗೂರನ ಪ್ರವಾದನೆಯ ಮಾತುಗಳು; ಇವನು ಇಥಿಯೇಲನಿಗೆ ಹೌದು, ಇಥಿಯೇಲನಿಗೂ ಉಕ್ಕಾಲ ನಿಗೂ ಹೀಗೆ ಹೇಳಿದನು.
30:2b.PRO.030.002 ಖಂಡಿತವಾಗಿಯೂ ಪ್ರತಿಯೊಬ್ಬ ಮನುಷ್ಯನಿಗಿಂತ ನಾನು ಪಶುಪ್ರಾಯನು; ಮನುಷ್ಯನ ವಿವೇಕವು ನನಗೆ ಇಲ್ಲ.
30:3b.PRO.030.003 ನಾನು ಜ್ಞಾನವನ್ನು ಪಡೆದುಕೊಂಡಿಲ್ಲ; ಅಲ್ಲದೆ ಪರಿಶುದ್ಧನ ವಿಷಯವಾದ ತಿಳುವಳಿಕೆಯು ನನಗಿಲ್ಲ.
30:4b.PRO.030.004 ಆಕಾಶಕ್ಕೆ ಏರಿದವನು ಇಲ್ಲವೆ ಇಳಿದವನು ಯಾರು? ತನ್ನ ಮುಷ್ಟಿಗಳಲ್ಲಿ ಗಾಳಿಯನ್ನು ಕೂಡಿಸಿದವನಾರು? ವಸ್ತ್ರದಲ್ಲಿ ನೀರನ್ನು ಕಟ್ಟಿದವ ನಾರು? ಭೂಮಿಯ ಕೊನೆಗಳನ್ನೆಲ್ಲಾ ಸ್ಥಾಪಿಸಿದವ ನಾರು? ನೀನು ಹೇಳುವದಾದರೆ ಆತನ ಹೆಸರೇನು? ಆತನ ಮಗನ ಹೆಸರೇನು?
30:5b.PRO.030.005 ದೇವರ ಪ್ರತಿಯೊಂದು ಮಾತು ಶುದ್ಧವಾಗಿದೆ; ಆತನಲ್ಲಿ ಭರವಸವಿಡುವವನಿಗೆ ಆತನು ಗುರಾಣಿಯಾಗಿದ್ದಾನೆ.
30:6b.PRO.030.006 ಆತನು ನಿನ್ನನ್ನು ಗದರಿಸುವಂತೆಯೂ ನೀನು ಸುಳ್ಳುಗಾರನೆಂದು ತೋರು ವಂತೆಯೂ ಆತನ ಮಾತುಗಳಿಗೆ ಯಾವದನ್ನು ಸೇರಿಸ ಬೇಡ.
30:7b.PRO.030.007 ನಿನ್ನಿಂದ ಎರಡನ್ನು ಕೇಳಿಕೊಂಡಿದ್ದೇನೆ; ನಾನು ಸಾಯುವದಕ್ಕಿಂತ ಮುಂಚೆ ಅವುಗಳನ್ನು ಕೊಡುವದಕ್ಕೆ ಹಿಂತೆಗೆಯಬೇಡ;
30:8b.PRO.030.008 ವ್ಯರ್ಥತ್ವವನ್ನೂ ಸುಳ್ಳುಗಳನ್ನೂ ನನ್ನಿಂದ ದೂರವಾಗಿ ತೆಗೆದುಹಾಕು. ಬಡತನವಾಗಲಿ ಐಶ್ವರ್ಯವಾಗಲಿ ನನಗೆ ಕೊಡಬೇಡ; ನನಗೆ ತಕ್ಕಷ್ಟು ಆಹಾರವನ್ನು ಭೋಜನ ಮಾಡಿಸು;
30:9b.PRO.030.009 ಇಲ್ಲವಾದರೆ ನಾನು ಸಂತೃಪ್ತನಾಗಿ ನಿನ್ನನ್ನು ನಿರಾಕರಿಸಿ--ಕರ್ತನು ಯಾರು ಎಂದು ಹೇಳಿಯೇನು? ಇಲ್ಲವೆ ನಾನು ಬಡವನಾಗಿ ಕದ್ದುಕೊಂಡು ದೇವರ ನಾಮವನ್ನು ಅಯೋಗ್ಯವಾಗಿ ಎತ್ತೇನು.
30:10b.PRO.030.010 ಅವನ ಯಜಮಾನನಿಗೆ ಸೇವಕನ ವಿಷಯವಾಗಿ ದೂರು ಹೇಳಬೇಡ; ಇದ ರಿಂದ ಅವನು ಶಪಿಸಾನು; ಆಗ ನೀನು ದೋಷಿ ಯಾಗುವಿ.
30:11b.PRO.030.011 ತಮ್ಮ ತಂದೆಯನ್ನು ಶಪಿಸಿ ತಮ್ಮ ತಾಯಿಗೆ ಶುಭವನ್ನು ಕೋರದೆ ಇರುವ ವಂಶಾವಳಿ ಇದೆ.
30:12b.PRO.030.012 ತಮ್ಮ ಮಲಿನತ್ವದಿಂದ ಇನ್ನು ತೊಳೆಯಲ್ಪಡದೆ ತಮ್ಮ ದೃಷ್ಟಿಯಲ್ಲಿ ಶುದ್ಧವಾಗಿರುವ ಒಂದು ವಂಶಾವಳಿಯು ಇದೆ.
30:13b.PRO.030.013 ಒಂದು ವಂಶಾ ವಳಿಯು ಇದೆ: ಅದರ ಕಣ್ಣುಗಳು ಎಷ್ಟೋ ಉನ್ನತ ವಾಗಿವೆ! ಅದರ ಕಣ್ಣು ರೆಪ್ಪೆಗಳು ಎತ್ತಲ್ಪಟ್ಟಿವೆ.
30:14b.PRO.030.014 ಭೂಮಿಯೊಳಗಿಂದ ಬಡವರನ್ನೂ ಮನುಷ್ಯ ರೊಳಗಿಂದ ದಿಕ್ಕಿಲ್ಲದವರನ್ನೂ ನುಂಗುವಂತೆ ತಮ್ಮ ಹಲ್ಲುಗಳು ಖಡ್ಗಗಳಂತೆಯೂ ತಮ್ಮ ದವಡೆಯ ಹಲ್ಲು ಗಳು ಕತ್ತಿಗಳಂತೆಯೂ ಇರುವ ಒಂದು ವಂಶಾವಳಿಯು ಇದೆ.
30:15b.PRO.030.015 ಕೊಡು, ಕೊಡು ಎಂದು ಕೂಗುವ ಇಬ್ಬರು ಹೆಣ್ಣುಮಕ್ಕಳು ಜಿಗಣೆಗೆ ಇವೆ. ಎಂದಿಗೂ ತೃಪ್ತಿಪಡದ ಮೂರು ಸಂಗತಿಗಳು ಇವೆ; ಹೌದು, ಸಾಕು ಎಂದು ಹೇಳದಿರುವ ನಾಲ್ಕು ಸಂಗತಿಗಳಿವೆ.
30:16b.PRO.030.016 ಯಾವವಂದರೆ: ಸಮಾಧಿ, ಬಂಜೆಯಾದ ಗರ್ಭ, ನೀರಿನಿಂದ ತುಂಬ ದಿದ್ದ ಭೂಮಿ, ಸಾಕೆಂದು ಹೇಳದೆ ಇರುವ ಬೆಂಕಿ.
30:17b.PRO.030.017 ತನ್ನ ತಂದೆಯನ್ನು ಹಾಸ್ಯಮಾಡಿ ತನ್ನ ತಾಯಿಯನ್ನು ಧಿಕ್ಕರಿಸುವವನ ಕಣ್ಣನ್ನು ಕಣಿವೆಯ ಕಾಗೆಗಳು ಕಿತ್ತು ಹಾಕುವವು, ಪ್ರಾಯದ ಹದ್ದುಗಳು ಅದನ್ನು ತಿನ್ನು ವವು.
30:18b.PRO.030.018 ನನಗೆ ಆಶ್ಚರ್ಯವಾದ ಮೂರು ಸಂಗತಿಗ ಳಿವೆ. ಹೌದು, ನಾನು ಅರಿಯದಿರುವ ನಾಲ್ಕು ಸಂಗ ತಿಗಳಿವೆ--
30:19b.PRO.030.019 ಆಕಾಶದಲ್ಲಿ ಹದ್ದಿನ ಹಾದಿ, ಬಂಡೆಯ ಮೇಲೆ ಸರ್ಪದ ಸರಣಿ; ಸಮುದ್ರದಲ್ಲಿ ಹಡಗಿನ ಮಾರ್ಗ, ಕನ್ಯೆಯೊಂದಿಗೆ ಮನುಷ್ಯನ ಮಾರ್ಗ.
30:20b.PRO.030.020 ಜಾರಸ್ತ್ರೀಯ ನಡತೆಯು ಹಾಗೆಯೇ ಇದೆ; ಅವಳು ತಿಂದು ತನ್ನ ಬಾಯನ್ನು ಒರಸಿಕೊಂಡು--ನಾನು ಯಾವ ಕೆಟ್ಟದ್ದನ್ನೂ ಮಾಡಲಿಲ್ಲ ಎಂದು ಹೇಳುತ್ತಾಳೆ.
30:21b.PRO.030.021 ಭೂಮಿಯು ಮೂರರಿಂದ ಕಳವಳಗೊಳ್ಳುತ್ತದೆ; ನಾಲ್ವರನ್ನು ಅದು ತಾಳಲಾರದು
30:22b.PRO.030.022 ಆಳುವ ದಾಸನು, ಹೊಟ್ಟೆತುಂಬಿದ ನೀಚನು,
30:23b.PRO.030.023 ಮದುವೆಯಾದ ಚಂಡಿಯು, ತನ್ನ ಯಜಮಾನಳಿಗೆ ಬಾಧ್ಯಸ್ಥಳಾದ ದಾಸಿಯು.
30:24b.PRO.030.024 ಭೂಮಿಯ ಮೇಲೆ ಅಧಿಕ ಜ್ಞಾನವು ಳ್ಳವುಗಳಾದ ನಾಲ್ಕು ಸಣ್ಣ ಪ್ರಾಣಿಗಳು ಇವೆ.
30:25b.PRO.030.025 ಇರುವೆಗಳು ದುರ್ಬಲ ಜಾತಿಯಾಗಿದ್ದರೂ ಬೇಸಿಗೆ ಯಲ್ಲಿ ತಮ್ಮ ಆಹಾರವನ್ನು ಸಿದ್ಧಮಾಡಿಕೊಳ್ಳುತ್ತವೆ.
30:26b.PRO.030.026 ಮೊಲಗಳು ಬಲಹೀನವಾದ ಜಾತಿಯಾಗಿದ್ದರೂ ಅವು ಬಂಡೆಗಳಲ್ಲಿ ತಮ್ಮ ಮನೆಗಳನ್ನು ಮಾಡಿಕೊಳ್ಳು ತ್ತವೆ.
30:27b.PRO.030.027 ಮಿಡತೆಗಳಿಗೆ ಅರಸನಿಲ್ಲ; ಆದರೂ ಅವೆಲ್ಲಾ ದಂಡುದಂಡಾಗಿ ಹೋಗುತ್ತವೆ.
30:28b.PRO.030.028 ಜೇಡರ ಹುಳು ತನ್ನ ಕೈಗಳಿಂದ ಹಿಡಿದುಕೊಳ್ಳುತ್ತದೆ; ಅದು ಅರಮನೆ ಗಳಲ್ಲಿ ಇರುತ್ತದೆ.
30:29b.PRO.030.029 ಗಂಭೀರ ಗಮನದ ಮೂರು ಪ್ರಾಣಿಗಳಿವೆ; ಹೌದು, ನಡತೆಯಲ್ಲಿ ಅಂದವಾಗಿರುವ ನಾಲ್ಕು ಪ್ರಾಣಿಗಳಿವೆ.
30:30b.PRO.030.030 ಮೃಗಗಳಲ್ಲಿ ಬಲಿಷ್ಠವಾಗಿ ರುವ ಸಿಂಹವು ಯಾವದಕ್ಕೂ ಹೆದರುವುದಿಲ್ಲ.
30:31b.PRO.030.031 ಬೇಟೆಯ ನಾಯಿ; ಹೋತವು ಸಹ; ಸೈನ್ಯಸಮೇತ ನಾದ ಅರಸನು.
30:32b.PRO.030.032 ನೀನು ಉಬ್ಬಿಕೊಂಡು ಮೂರ್ಖ ನಾಗಿ ನಡೆದಿದ್ದರೆ ಇಲ್ಲವೆ ಕೆಟ್ಟದ್ದಾಗಿ ಆಲೋಚಿಸಿದ್ದರೆ ನಿನ್ನ ಬಾಯಿಯ ಮೇಲೆ ಕೈಯಿಟ್ಟುಕೋ.ಹಾಲು ಕರೆಯುವದರಿಂದ ನಿಜವಾಗಿಯೂ ಬೆಣ್ಣೆ ಬರುತ್ತದೆ; ಮೂಗು ಹಿಂಡುವದರಿಂದ ರಕ್ತ ಬರುತ್ತದೆ; ಹಾಗೆಯೇ ಕೋಪವನ್ನೆಬ್ಬಿಸುವದರಿಂದ ಜಗಳ ಬರುತ್ತದೆ.
30:33b.PRO.030.033 ಹಾಲು ಕರೆಯುವದರಿಂದ ನಿಜವಾಗಿಯೂ ಬೆಣ್ಣೆ ಬರುತ್ತದೆ; ಮೂಗು ಹಿಂಡುವದರಿಂದ ರಕ್ತ ಬರುತ್ತದೆ; ಹಾಗೆಯೇ ಕೋಪವನ್ನೆಬ್ಬಿಸುವದರಿಂದ ಜಗಳ ಬರುತ್ತದೆ.
31
31:1b.PRO.031.001 ಅರಸನಾದ ಲೆಮೂವೇಲನ ಮಾತುಗಳು, ಅಂದರೆ ಅವನ ತಾಯಿಯು ಅವನಿಗೆ ಉಪದೇಶಿಸಿದ ಪ್ರವಾದನೆಯು.
31:2b.PRO.031.002 ನನ್ನ ಮಗನೇ ಏನು? ನನ್ನ ಗರ್ಭಪುತ್ರನೇ ಏನು? ನನ್ನ ಪ್ರತಿಜ್ಞೆಯ ಮಗನೇ ಏನು?
31:3b.PRO.031.003 ನಿನ್ನ ತ್ರಾಣವನ್ನು ಸ್ತ್ರೀಯರಲ್ಲಿ ಒಪ್ಪಿಸದಿರು, ಇಲ್ಲವೆ ಅರಸರನ್ನು ನಾಶಪಡಿಸುವ ದಾರಿಗಳಿಗೆ ತಿರುಗಬೇಡ.
31:4b.PRO.031.004 ದ್ರಾಕ್ಷಾರಸವನ್ನು ಕುಡಿ ಯುವದು ರಾಜರಿಗೆ ಯೋಗ್ಯವಲ್ಲ; ಓ ಲೆಮೂ ವೇಲನೇ, ಅದು ಅರಸರಿಗೆ ಬೇಡ; ಇಲ್ಲವೆ ಪ್ರಭುಗ ಳಿಗೆ ಕುಡಿಯುವದು ಹಿತವಲ್ಲ;
31:5b.PRO.031.005 ಕುಡಿದರೆ ಅವರು ಕಟ್ಟಿಳೆಯನ್ನು ಮರೆತು ಬಾಧಿತರಲ್ಲಿ ಯಾವನಿಗಾದರೂ ನ್ಯಾಯತೀರ್ಪನ್ನು ವ್ಯತ್ಯಾಸಮಾಡುತ್ತಾರೆ.
31:6b.PRO.031.006 ನಾಶ ವಾಗುವದಕ್ಕೆ ಸಿದ್ಧವಾಗಿರುವವನಿಗೆ ಮದ್ಯವನ್ನೂ ಮನೋವ್ಯಥೆಪಡುವವರಿಗೆ ದ್ರಾಕ್ಷಾರಸವನ್ನೂ ಕೊಡು.
31:7b.PRO.031.007 ಅವನು ಕುಡಿದು ತನ್ನ ಬಡತನವನ್ನು ಮರೆತುಬಿಡಲಿ; ತನ್ನ ಶ್ರೆಮೆಯನ್ನು ಇನ್ನು ಜ್ಞಾಪಕಕ್ಕೆ ತಾರದಿರಲಿ;
31:8b.PRO.031.008 ಮೂಕರಿಗಾಗಿಯೂ ನಾಶವಾಗುವದಕ್ಕೆ ನೇಮಿಸಲ್ಪಟ್ಟ ವರೆಲ್ಲರಿಗಾಗಿಯೂ ನಿನ್ನ ಬಾಯನ್ನು ತೆರೆ.
31:9b.PRO.031.009 ನಿನ್ನ ಬಾಯಿ ತೆರೆದು ನೀತಿಯಿಂದ ನ್ಯಾಯತೀರಿಸು; ದರಿದ್ರ ರಿಗಾಗಿಯೂ ದಿಕ್ಕಿಲ್ಲದವರಿಗಾಗಿಯೂ ವ್ಯಾಜ್ಯಮಾಡು.
31:10b.PRO.031.010 ಗುಣವತಿಯಾದ ಸ್ತ್ರೀಯನ್ನು ಯಾವನು ಕಂಡು ಕೊಂಡಾನು? ಅವಳ ಕ್ರಯ ಹವಳಕ್ಕಿಂತಲೂ ಅಮೂ ಲ್ಯವೇ.
31:11b.PRO.031.011 ತನಗೆ ಯಾವ ನಷ್ಟವೂ ಇರದಂತೆ ಅವಳ ಪತಿಯ ಹೃದಯವು ತನ್ನಲ್ಲಿ ನಿರ್ಭಯವಾಗಿ ಭರವಸೆ ಇಡುತ್ತದೆ.
31:12b.PRO.031.012 ತನ್ನ ಜೀವಮಾನದಲ್ಲೆಲ್ಲಾ ಆಕೆಯು ಅವನಿಗೆ ಕೆಟ್ಟದ್ದನ್ನಲ್ಲ, ಒಳ್ಳೇದನ್ನೇ ಮಾಡುವಳು.
31:13b.PRO.031.013 ಆಕೆಯು ಉಣ್ಣೆಯನ್ನೂ ಸಣಬನ್ನೂ ಹುಡುಕು ವವಳಾಗಿ ತನ್ನ ಕೈಗಳಿಂದ ಮನಃಪೂರ್ವಕವಾಗಿ ಕೆಲಸ ಮಾಡುತ್ತಾಳೆ.
31:14b.PRO.031.014 ಆಕೆಯು ವರ್ತಕರ ಹಡಗುಗಳಂತೆ ಇದ್ದಾಳೆ; ಆಕೆಯು ದೂರದಿಂದ ತನ್ನ ಆಹಾರವನ್ನು ತರುತ್ತಾಳೆ.
31:15b.PRO.031.015 ಆಕೆಯು ಇನ್ನೂ ಕತ್ತಲಿರುವಾಗಲೇ ಎದ್ದು ತನ್ನ ಮನೆಯವರಿಗೆ ಆಹಾರವನ್ನು ಕೊಟ್ಟು ತನ್ನ ದಾಸಿಯರಿಗೆ ಭತ್ಯವನ್ನು ಹಂಚುತ್ತಾಳೆ.
31:16b.PRO.031.016 ಆಕೆಯು ಯೋಚಿಸಿ ಹೊಲವನ್ನು ಕೊಂಡುಕೊಳ್ಳುತ್ತಾಳೆ; ತನ್ನ ಕೈಕೆಲಸದ ಫಲದಿಂದ ಆಕೆಯು ದ್ರಾಕ್ಷಾಲತೆಗಳನ್ನು ನೆಡುತ್ತಾಳೆ.
31:17b.PRO.031.017 ಆಕೆಯು ತನ್ನ ಬಲದಿಂದ ನಡುವನ್ನು ಕಟ್ಟಿಕೊಂಡು ತನ್ನ ತೋಳುಗಳನ್ನು ಶಕ್ತಿಗೊಳಿಸುತ್ತಾಳೆ.
31:18b.PRO.031.018 ತನ್ನ ವ್ಯಾಪಾರದ ಸರಕು ಒಳ್ಳೇದೆಂದು ಆಕೆಯು ತಿಳು ಕೊಳ್ಳುತ್ತಾಳೆ; ಆಕೆಯ ದೀಪವು ರಾತ್ರಿಯಲ್ಲೆಲ್ಲಾ ಆರದು.
31:19b.PRO.031.019 ರಾಟೆಯ ಮೇಲೆ ಕೈಹಾಕಿ ತನ್ನ ಕೈಗಳು ಕದರನ್ನು ಹಿಡಿಯುತ್ತವೆ.
31:20b.PRO.031.020 ಆಕೆಯು ಬಡವರಿಗಾಗಿ ಕೈ ಬಿಚ್ಚುತ್ತಾಳೆ; ಹೌದು, ದಿಕ್ಕಿಲ್ಲದವರಿಗೆ ಆಕೆಯು ಕೈ ನೀಡುತ್ತಾಳೆ.
31:21b.PRO.031.021 ತನ್ನ ಮನೆಯವರಿಗಾಗಿ ಆಕೆಯು ಹಿಮಕ್ಕೆ ಭಯಪಡುವದಿಲ್ಲ; ಆಕೆಯ ಮನೆಯವ ರೆಲ್ಲರೂ ರಕ್ತಾಂಭರಗಳಿಂದ ಹೊದಿಸಲ್ಪಟ್ಟಿದ್ದಾರೆ.
31:22b.PRO.031.022 ಆಕೆಯು ತನಗಾಗಿ ರತ್ನ ಕಂಬಳಿಗಳನ್ನು ಮಾಡು ತ್ತಾಳೆ; ಆಕೆಯ ಉಡುಪೋ ರೇಷ್ಮೆ ರಕ್ತಾಂಭರ.
31:23b.PRO.031.023 ದೇಶದ ಹಿರಿಯರ ಮಧ್ಯದಲ್ಲಿ ತನ್ನ ಪತಿಯು ಕೂತಿ ರುವಾಗ ಅವನು ದ್ವಾರಗಳಲ್ಲಿ ಪ್ರಸಿದ್ಧನಾಗಿರುವನು.
31:24b.PRO.031.024 ಆಕೆಯು ನಯವಾದ ನಾರುಮಡಿಯನ್ನು ನೇಯ್ದು ಮಾರಾಟ ಮಾಡುತ್ತಾಳೆ; ಆಕೆಯು ವರ್ತಕನಿಗೆ ನಡುಕಟ್ಟುಗಳನ್ನು ಒಪ್ಪಿಸುತ್ತಾಳೆ.
31:25b.PRO.031.025 ಆಕೆಯ ಉಡುಪು ಬಲವೂ ಘನತೆಯೂ ಆಗಿವೆ; ಭವಿಷ್ಯತ್ತಿ ನಲ್ಲಿ ಆಕೆಯು ಸಂತೋಷಿಸುವಳು.
31:26b.PRO.031.026 ಆಕೆಯು ಜ್ಞಾನದಿಂದ ತನ್ನ ಬಾಯಿ ತೆರೆಯುತ್ತಾಳೆ; ತನ್ನ ನಾಲಿಗೆಯಲ್ಲಿ ದಯೆಯ ಉಪದೇಶವಿರುವದು.
31:27b.PRO.031.027 ಆಕೆಯು ತನ್ನ ಗೃಹಕೃತ್ಯಗಳ ನ್ನೆಲ್ಲಾ ಚೆನ್ನಾಗಿ ನೋಡಿಕೊಂಡವಳಾಗಿ ಸೋಮಾರಿ ತನದ ರೊಟ್ಟಿಯನ್ನು ತಿನ್ನುವದಿಲ್ಲ.
31:28b.PRO.031.028 ಆಕೆಯ ಮಕ್ಕಳು ಎದ್ದು ಆಕೆಯನ್ನು ಧನ್ಯಳೆಂದು ಕರೆಯುತ್ತಾರೆ; ಆಕೆಯ ಪತಿಯು ಸಹ ಹೊಗಳುತ್ತಾನೆ.
31:29b.PRO.031.029 ಅವನು--ಬಹು ಮಂದಿ ಕುಮಾರ್ತೆಯರು ಗುಣವತಿಯಾಗಿ ನಡೆದಿ ದ್ದಾರೆ; ಆದರೆ ನೀನು ಅವರೆಲ್ಲರಿಗಿಂತಲೂ ಶ್ರೇಷ್ಠಳು ಎಂದು ತನ್ನ ಪತಿಯು ಹೊಗಳುತ್ತಾನೆ.
31:30b.PRO.031.030 ಸೌಂದ ರ್ಯವು ಮೋಸಕರ; ಲಾವಣ್ಯವು ವ್ಯರ್ಥ; ಕರ್ತನಿಗೆ ಭಯಪಡುವವಳು ಹೊಗಳಲ್ಪಡುವಳು.ಆಕೆಯ ಕೈಕೆಲಸದ ಪ್ರತಿಫಲವನ್ನು ಸಲ್ಲಿಸಿರಿ; ದ್ವಾರಗಳಲ್ಲಿ ಆಕೆಯ ಕಾರ್ಯಗಳು ಆಕೆಯನ್ನು ಹೊಗಳಲಿ.
31:31b.PRO.031.031 ಆಕೆಯ ಕೈಕೆಲಸದ ಪ್ರತಿಫಲವನ್ನು ಸಲ್ಲಿಸಿರಿ; ದ್ವಾರಗಳಲ್ಲಿ ಆಕೆಯ ಕಾರ್ಯಗಳು ಆಕೆಯನ್ನು ಹೊಗಳಲಿ.
- Holder of rights
- Multilingual Bible Corpus
- Citation Suggestion for this Object
- TextGrid Repository (2025). Kannada Collection. Proverbs (Kannada). Proverbs (Kannada). Multilingual Parallel Bible Corpus. Multilingual Bible Corpus. https://hdl.handle.net/21.11113/0000-0016-A1AA-2