Micah (Kannada)
1
1:1b.MIC.001.001 ಯೆಹೂದದ ಅರಸನಾದ ಯೋಥಾಮ ಆಹಾಜ, ಹಿಜ್ಕೀಯ, ದಿವಸಗಳಲ್ಲಿ ಸಮಾರ್ಯದ ಯೆರೂಸಲೇಮಿನ ವಿಷಯವಾಗಿ ಮೋರೇಷೆತಿನವನಾದ ವಿಾಕನಿಗೆ ಉಂಟಾದ ಕರ್ತನ ವಾಕ್ಯವು.
1:2b.MIC.001.002 ಎಲ್ಲಾ ಜನಗಳೇ, ಕೇಳಿರಿ, ಭೂಮಿಯೇ, ಅದರ ಪರಿಪೂರ್ಣತೆಯೇ, ಕಿವಿಗೊಡಿರಿ; ಕರ್ತನಾದ ದೇವರು ತನ್ನ ಪರಿಶುದ್ಧ ಮಂದಿರದೊಳಗಿಂದ ಕರ್ತನು ನಿಮಗೆ ವಿರೋಧವಾಗಿ ಸಾಕ್ಷಿಯಾಗಿರಲಿ.
1:3b.MIC.001.003 ಇಗೋ, ಕರ್ತನು ತನ್ನ ಸ್ಥಾನದಿಂದ ಹೊರಡುತ್ತಾನೆ; ಆತನು ಇಳಿದು ಭೂಮಿಯ ಉನ್ನತವಾದ ಸ್ಥಳಗಳ ಮೇಲೆ ತುಳಿಯುವನು.
1:4b.MIC.001.004 ಬೆಂಕಿಯ ಮುಂದೆ ಮೇಣದ ಹಾಗೆಯೂ ಇಳಿಜಾರಿನ ಸ್ಥಳದಲ್ಲಿ ಸುರಿಯುವ ನೀರಿನ ಹಾಗೆಯೂ ಬೆಟ್ಟಗಳು ಆತನ ಕೆಳಗೆ ಕರಗುವವು; ತಗ್ಗುಗಳು ಸೀಳುವವು.
1:5b.MIC.001.005 ಇದೆಲ್ಲಾ ಯಾಕೋಬಿನ ಅಪರಾಧದ ನಿಮಿತ್ತವೂ ಇಸ್ರಾಯೇಲಿನ ಮನೆತನದ ವರ ಪಾಪಗಳ ನಿಮಿತ್ತವೂ ಆಯಿತು; ಯಾಕೋಬಿನ ಅಪರಾಧವೇನು? ಸಮಾರ್ಯವಲ್ಲವೋ? ಯೆಹೂ ದದ ಉನ್ನತಸ್ಥಳಗಳೇನು? ಯೆರೂಸಲೇಮಲ್ಲವೋ?
1:6b.MIC.001.006 ಹೀಗಿರುವದರಿಂದ ನಾನು ಸಮಾರ್ಯವನ್ನು ಹೊಲದ ದಿಬ್ಬೆಯಾಗಿಯೂ ದ್ರಾಕ್ಷೇ ಬಳ್ಳಿ ನೆಡುವ ಸ್ಥಳವಾಗಿಯೂ ಮಾಡುವೆನು; ಅದರ ಕಲ್ಲುಗಳನ್ನು ತಗ್ಗಿನಲ್ಲಿ ಸುರಿದುಬಿಟ್ಟು; ಅದರ ಅಸ್ತಿವಾರಗಳನ್ನು ಹೊರ ಗೆಡುವೆನು.
1:7b.MIC.001.007 ಅದರ ಕೆತ್ತಿದ ವಿಗ್ರಹಗಳೆಲ್ಲಾ ತುಂಡು ಗಳಾಗುವಂತೆ ಒಡೆಯಲ್ಪಡುವವು. ಅದಕ್ಕೆ ಆದ ಸಂಪಾದನೆಗಳೆಲ್ಲಾ ಬೆಂಕಿಯಿಂದ ಸುಡಲ್ಪಡುವವು; ಅದರ ವಿಗ್ರಹಗಳನ್ನೆಲ್ಲಾ ಹಾಳುಮಾಡುವೆನು; ಸೂಳೆಯ ಕೂಲಿಯಿಂದ ಅವುಗಳನ್ನು ಕೂಡಿಸಿ ಕೊಂಡಿತು, ಸೂಳೆಯ ಕೂಲಿಗೆ ಅವು ತಿರುಗುವವು.
1:8b.MIC.001.008 ಆದದರಿಂದ ನಾನು ಗೋಳಾಡಿ ಅರಚುವೆನು; ಬರಿಗಾಲಾಗಿಯೂ ಬೆತ್ತಲೆಯಾಗಿಯೂ ಹೋಗುವೆನು; ನರಿಗಳ ಹಾಗೆ ಗೋಳಾಡುವೆನು; ಬಕಪಕ್ಷಿಯಂತೆ ದುಃಖಪಡುವೆನು.
1:9b.MIC.001.009 ಅದರ ಗಾಯವು ಗುಣವಾಗ ದಂಥದ್ದು, ಯಾಕಂದರೆ ಅದು ಯೆಹೂದಕ್ಕೆ ಬಂತು; ನನ್ನ ಜನರ ಬಾಗಲಿಗೂ ಯೆರೂಸಲೇಮಿನ ಮಟ್ಟಿಗೂ ಮುಟ್ಟಿದ್ದಾನೆ.
1:10b.MIC.001.010 ಗತ್ ಊರಿನಲ್ಲಿ ಅದನ್ನು ತಿಳಿಸಬೇಡ; ಸ್ವಲ್ಪವಾದರೂ ಅಳಬೇಡ; ಎಫ್ರಾತದ ಮನೆಯ ಧೂಳಿನಲ್ಲಿ ಹೊರಳಾಡು.
1:11b.MIC.001.011 ಶಾಫೀರಿನ ನಿವಾಸಿಯೇ, ನಾಚಿಕೆ ಮುಚ್ಚದೆ ಹಾದುಹೋಗು; ಬೇತೇಚೆಲಿನ ಗೋಳಾಟದಲ್ಲಿ ಚಾನಾನಿನ ನಿವಾಸಿ ಮುಂದೆ ಬರಲಿಲ್ಲ; ಅವನು ನಿಮ್ಮಿಂದ ತನ್ನ ಸ್ಥಾನವನ್ನು ತಕ್ಕೊಳ್ಳುವನು.
1:12b.MIC.001.012 ಮಾರೋತಿನ ನಿವಾಸಿ ಒಳ್ಳೇದಕ್ಕೆ ಜಾಗ್ರತೆಯಾಗಿ ಕಾದುಕೊಳ್ಳುತ್ತಾನೆ; ಆದರೆ ಕೇಡು ಕರ್ತನಿಂದ ಯೆರೂಸಲೇಮಿನ ಬಾಗಲಿಗೆ ಇಳಿದಿದೆ.
1:13b.MIC.001.013 ಲಾಕೀಷಿನ ನಿವಾಸಿಯೇ, ವೇಗವುಳ್ಳ ಕುದುರೆಗೆ ರಥವನ್ನು ಕಟ್ಟು, ಇದೇ ಚೀಯೋನಿನ ಮಗಳ ಪಾಪದ ಆರಂಭವು; ಇಸ್ರಾಯೇಲಿನ ಅಪರಾಧಗಳು ನಿನ್ನಲ್ಲಿ ಕಂಡುಬಂದವು.
1:14b.MIC.001.014 ಹೀಗಿರುವದರಿಂದ ಮೋರೆಷತ್ ಗತ್ ಊರಿಗೆ ದಾನಗಳನ್ನು ಕೊಡುವಿ, ಅಕ್ಜೀಬಿನ ಮನೆತನಗಳು ಇಸ್ರಾಯೇಲಿನ ಅರಸರಿಗೆ ಸುಳ್ಳಾಗಿರುವವು.
1:15b.MIC.001.015 ಮಾರೇ ಷದ ನಿವಾಸಿಯೇ, ಇನ್ನೂ ಬಾಧ್ಯನನ್ನು ನಿನ್ನ ಬಳಿಗೆ ತರುವೆನು; ಅವನು ಇಸ್ರಾಯೇಲಿನ ಮಹಿಮೆಯಾದ ಅದುಲ್ಲಾಮಿನ ಮಟ್ಟಿಗೂ ಬರುವನು.ನಿನ್ನ ಮುದ್ದು ಮಕ್ಕಳಿಗೋಸ್ಕರ ತಲೆಬೋಳಿಸಿಕೊಂಡು ಕ್ಷೌರ ಮಾಡಿಸಿಕೊ; ಹದ್ದಿನಂತೆ ನಿನ್ನ ಬೋಳುತನವನ್ನು ಅಗಲ ಮಾಡಿಕೊ; ಅವರು ನಿನ್ನನ್ನು ಬಿಟ್ಟು ಸೆರೆಯಾಗಿ ಹೋಗಿದ್ದಾರೆ.
1:16b.MIC.001.016 ನಿನ್ನ ಮುದ್ದು ಮಕ್ಕಳಿಗೋಸ್ಕರ ತಲೆಬೋಳಿಸಿಕೊಂಡು ಕ್ಷೌರ ಮಾಡಿಸಿಕೊ; ಹದ್ದಿನಂತೆ ನಿನ್ನ ಬೋಳುತನವನ್ನು ಅಗಲ ಮಾಡಿಕೊ; ಅವರು ನಿನ್ನನ್ನು ಬಿಟ್ಟು ಸೆರೆಯಾಗಿ ಹೋಗಿದ್ದಾರೆ.
2
2:1b.MIC.002.001 ಅಪರಾಧವನ್ನು ಯೋಚಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡಿಸುವವರಿಗೆ ಅಯ್ಯೋ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ; ಅದು ಅವರ ಕೈವಶದಲ್ಲಿದೆ.
2:2b.MIC.002.002 ಅವರು ಹೊಲಗಳನ್ನು ಆಶಿಸಿ ಬಲಾತ್ಕಾರದಿಂದ ತಕ್ಕೊಳ್ಳುತ್ತಾರೆ; ಮನೆಗಳನ್ನು ಸಹ ತೆಗೆದುಕೊಳ್ಳುತ್ತಾರೆ; ಮನುಷ್ಯನಿಗೂ ಅವನ ಮನೆಗೂ ಹೌದು, ಮನುಷ್ಯನಿಗೂ ಅವನ ಸ್ವಾಸ್ತ್ಯಕ್ಕೂ ಬಲಾತ್ಕಾರ ಮಾಡುತ್ತಾರೆ.
2:3b.MIC.002.003 ಆದದರಿಂದ ಕರ್ತನು ಹೇಳುವದೇನಂದರೆ--ಇಗೋ, ನಾನು ಈ ಕುಟುಂಬಕ್ಕೆ ವಿರೋಧವಾಗಿ ಕೆಟ್ಟದ್ದನ್ನು ಯೋಚಿಸು ತ್ತೇನೆ; ಆದದರಿಂದ ನೀವು ನಿಮ್ಮ ಕುತ್ತಿಗೆಗಳನ್ನು ಹಿಂತೆ ಗೆಯದೆ ಅಹಂಕಾರವಾಗಿ ನಡೆಯದೆ ಇರುವಿರಿ; ಇದು ಕೆಟ್ಟಕಾಲವೇ.
2:4b.MIC.002.004 ಆ ದಿನದಲ್ಲಿ ನಿಮ್ಮ ವಿಷಯವಾಗಿ ಸಾಮ್ಯವನ್ನೆತ್ತಿ ದುಃಖವುಳ್ಳ ಗೋಳಾಟವನ್ನು ಮಾಡಿ ಹೇಳುವದೇನಂದರೆ--ನಾವು ಪೂರ್ಣವಾಗಿ ಹಾಳಾ ದೆವು; ಅವನು ನನ್ನ ಜನರ ಪಾಲನ್ನು ಬದಲಾಯಿಸಿ ದ್ದಾನೆ; ಅವನು ಅದನ್ನು ನನ್ನಿಂದ ಹಿಂತೆಗೆದದ್ದು ಹೇಗೆ? ಹಿಂತಿರುಗಿ ಅವನು ನಮ್ಮ ಹೊಲಗಳನ್ನು ಹಂಚಿಕೊಟ್ಟಿ ದ್ದಾನೆ.
2:5b.MIC.002.005 ಆದದರಿಂದ ಕರ್ತನ ಸಭೆಯಲ್ಲಿ ಪಾಲಿಗಾಗಿ ನೂಲು ಹಾಕುವವನು ನಿನಗೆ ಒಬ್ಬನೂ ಇರುವದಿಲ್ಲ.
2:6b.MIC.002.006 ಪ್ರವಾದಿಸಬೇಡಿರೆಂದು ಪ್ರವಾದಿಸುವವರಿಗೆ ಅನ್ನು ತ್ತಾರೆ; ಅವರಿಗೆ ಆತನು ಪ್ರವಾದಿಸನು, ಆದರೆ ಅವರು ನಾಚಿಕೆಪಡುವದಿಲ್ಲ.
2:7b.MIC.002.007 ಯಾಕೋಬಿನ ಮನೆತನದವ ರೆಂದು ಹೆಸರುಗೊಂಡವರೇ, ಕರ್ತನ ಆತ್ಮವು ಕಡಿಮೆ ಯಾಯಿತೋ? ಇವು ಆತನ ಕ್ರಿಯೆಗಳೋ? ಯಥಾ ರ್ಥವಾಗಿ ನಡೆಯುವವನಿಗೆ ನನ್ನ ಮಾತುಗಳು ಒಳ್ಳೇದನ್ನು ಮಾಡುವದಿಲ್ಲವೋ?
2:8b.MIC.002.008 ಇತ್ತೀಚೆಗೆ ನನ್ನ ಜನರು ವೈರಿಯ ಹಾಗೆ ಎದ್ದಿದ್ದಾರೆ; ಯುದ್ಧದಿಂದ ತಿರುಗಿಕೊಂಡು ಭದ್ರವಾಗಿ ಹಾದುಹೋಗುವವರ ವಸ್ತ್ರದ ಸಂಗಡ ನಿಲುವಂಗಿಯನ್ನು ನೀವು ಕಿತ್ತುಕೊ ಳ್ಳುತ್ತೀರಿ.
2:9b.MIC.002.009 ನನ್ನ ಜನರ ಸ್ತ್ರೀಯರನ್ನು ಅವರ ರಮ್ಯ ವಾದ ಮನೆಗಳೊಳಗಿಂದ ಹೊರಡಿಸಿದ್ದೀರಿ; ಅವರ ಮಕ್ಕಳಿಂದ ನನ್ನ ಮಹಿಮೆಯನ್ನು ಎಂದೆಂದಿಗೂ ತೆಗೆದಿ ದ್ದೀರಿ.
2:10b.MIC.002.010 ನೀವು ಎದ್ದು ಹೋಗಿರಿ; ಇದು ನಿಮ್ಮ ವಿಶ್ರಾಂತಿ ಅಲ್ಲ; ಇದು ಅಶುದ್ಧವಾಗಿದ್ದ ಕಾರಣ, ನಿಮ್ಮನ್ನು ಕಠಿಣವಾದ ನಾಶನದಿಂದ ನಾಶಮಾಡು ವದು.
2:11b.MIC.002.011 ಒಬ್ಬನು ಆತ್ಮದಲ್ಲಿಯೂ ವಂಚನೆಯಲ್ಲಿಯೂ ನಡೆದು ಸುಳ್ಳು ಹೇಳಿ--ನಿನಗೆ ದ್ರಾಕ್ಷಾರಸವನ್ನೂ ಮತ್ತಾಗುವದನ್ನೂ ಕುರಿತು ಪ್ರವಾದಿಸುವೆನೆಂದು ಹೇಳಿ ದರೆ, ಇವನೇ ಈ ಜನರಿಗೆ ಪ್ರವಾದಿಯಾಗಿರುವನು.
2:12b.MIC.002.012 ಯಾಕೋಬೇ ನಿನ್ನವರನ್ನೆಲ್ಲಾ ನಿಶ್ಚಯವಾಗಿ ಕೂಡಿಸುವೆನು; ಇಸ್ರಾಯೇಲಿನಲ್ಲಿ ಉಳಿದವರನ್ನು ನಿಶ್ಚಯವಾಗಿ ಕೂಡಿಸುವೆನು, ಬೊಚ್ರದ ಕುರಿಗ ಳಂತೆಯೂ ತಮ್ಮ ಹಟ್ಟಿಯ ನಡುವೆ ಇರುವ ಮಂದೆ ಯಂತೆಯೂ ಅವರನ್ನು ಒಟ್ಟಾಗಿ ಕೂಡಿಡುವೆನು; ಬಹುಮಂದಿಯಾಗಿರುವ ಕಾರಣ ಅವರು ಮಹಾ ಶಬ್ದ ಮಾಡುವರು.ಒಡೆಯುವವನು ಅವರ ಮುಂದೆ ಬಂದಿದ್ದಾನೆ; ಅವರು ಬಾಗಲನ್ನು ಒಡೆದು ಅದರಿಂದ ಹಾದುಹೋಗಿದ್ದಾರೆ; ಅವರ ಅರಸನು ಅವರ ಮುಂದೆ ಹಾದುಹೋಗುತ್ತಾನೆ; ಕರ್ತನು ಅವರಿಗೆ ಮುಂದಾಗಿರುವನು.
2:13b.MIC.002.013 ಒಡೆಯುವವನು ಅವರ ಮುಂದೆ ಬಂದಿದ್ದಾನೆ; ಅವರು ಬಾಗಲನ್ನು ಒಡೆದು ಅದರಿಂದ ಹಾದುಹೋಗಿದ್ದಾರೆ; ಅವರ ಅರಸನು ಅವರ ಮುಂದೆ ಹಾದುಹೋಗುತ್ತಾನೆ; ಕರ್ತನು ಅವರಿಗೆ ಮುಂದಾಗಿರುವನು.
3
3:1b.MIC.003.001 ಆಗ ನಾನು ಹೇಳಿದ್ದೇನಂದರೆ--ಯಾಕೋಬಿನ ಮುಖ್ಯಸ್ಥರೇ, ಇಸ್ರಾಯೇ ಲಿನ ಮನೆತನದ ಪ್ರಧಾನರೇ, ಈಗ ಕೇಳಿರಿ; ನ್ಯಾಯ ವನ್ನು ತಿಳಿಯುವದು ನಿಮ್ಮದಲ್ಲವೋ?
3:2b.MIC.003.002 ಒಳ್ಳೇದನ್ನು ಹಗೆಮಾಡಿ ಕೆಟ್ಟದ್ದನ್ನು ಪ್ರೀತಿಮಾಡುವವರೇ, ಅವರ ಮೇಲಿನಿಂದ ಅವರ ಚರ್ಮವನ್ನೂ ಅವರ ಎಲುಬುಗಳ ಮೇಲಿನಿಂದ ಅವರ ಮಾಂಸವನ್ನೂ ಕಿತ್ತುಕೊಳ್ಳು ವವರೇ,
3:3b.MIC.003.003 ನನ್ನ ಜನರ ಮಾಂಸವನ್ನು ತಿಂದು ಅವರ ಚರ್ಮವನ್ನು ಸುಲಿದು ಅವರ ಎಲುಬುಗಳನ್ನು ಮುರಿದು ಮಡಿಕೆಯಂತೆ ಅವರ ಮಾಂಸವನ್ನು ತುಂಡು ಮಾಡಿ ಕೊಪ್ಪರಿಗೆಯಲ್ಲಿ ಹಾಕುತ್ತೀರಿ.
3:4b.MIC.003.004 ಆಗ ಅವರು ಕರ್ತನಿಗೆ ಮೊರೆಯಿಡುವರು; ಆದರೆ ಆತನು ಅವರಿಗೆ ಉತ್ತರ ಕೊಡುವದಿಲ್ಲ. ಅವರು ಕೆಟ್ಟ ಕ್ರಿಯೆಗಳನ್ನು ಮಾಡಿದ ಪ್ರಕಾರವೇ, ಆ ಕಾಲದಲ್ಲಿ ಅವರಿಗೆ ತನ್ನ ಮುಖವನ್ನು ಮರೆಮಾಡುವನು.
3:5b.MIC.003.005 ತನ್ನ ಜನರು ತಪ್ಪುವಂತೆ ಮಾಡುವ ಪ್ರವಾದಿಗಳ ವಿಷಯವಾಗಿ ಕರ್ತನು ಹೀಗೆ ಹೇಳುತ್ತಾನೆ--ಅವರಿಗೆ ತಿನ್ನುವದಕ್ಕೆ ಕೊಡುವಂತವರಿಗೆ--ನಿಮಗೆ ಸಮಾಧಾನವಾಗಲಿ ಎಂದು ಹೇಳುತ್ತಾರೆ; ಆದರೆ ತಮ್ಮ ಬಾಯಿಗೆ ಏನೂ ಕೊಡದವನ ವಿರೋಧವಾಗಿ ಯುದ್ಧಕ್ಕೂ ಅವರು ಸಿದ್ಧರಾಗುವರು.
3:6b.MIC.003.006 ದರ್ಶನವಿಲ್ಲದ ನಿಮಗೆ ರಾತ್ರಿ ಯಾಗುವದು; ಶಕುನವಿಲ್ಲದೆ ನಿಮಗೆ ಕತ್ತಲಾಗುವದು; ಹೌದು, ಪ್ರವಾದಿಗಳ ಮೇಲೆ ಸೂರ್ಯ ಮುಣುಗು ವದು, ಅವರ ಮೇಲೆ ಹಗಲು ಕತ್ತಲಾಗುವದು.
3:7b.MIC.003.007 ಆಗ ದರ್ಶಿಗಳು ನಾಚಿಕೆಪಡುವರು, ಶಕುನಗಾರರು ವಿಸ್ಮಯಗೊಳ್ಳುವರು; ಹೌದು, ದೇವರಿಂದ ಉತ್ತರ ವಿಲ್ಲದ ಕಾರಣ ಎಲ್ಲರೂ ತಮ್ಮ ತುಟಿಗಳನ್ನು ಮುಚ್ಚಿ ಕೊಳ್ಳುವರು.
3:8b.MIC.003.008 ಆದರೆ ನಿಶ್ಚಯವಾಗಿ ನಾನು ಯಾಕೋ ಬ್ಯರಿಗೆ ಅವನ ಅಪರಾಧವನ್ನೂ ಇಸ್ರಾಯೇಲಿಗೆ ಅವನ ಪಾಪವನ್ನೂ ತಿಳಿಸುವದಕ್ಕೆ ದೇವರ ಆತ್ಮನ ಮುಖಾಂತರ ಶಕ್ತಿಯಿಂದಲೂ ನ್ಯಾಯದಿಂದಲೂ ತ್ರಾಣದಿಂದಲೂ ತುಂಬಿದ್ದೇನೆ.
3:9b.MIC.003.009 ಯಾಕೋಬನ ಮನೆತನದವರ ಪ್ರಧಾನರೇ, ಇಸ್ರಾಯೇಲಿನ ಮನೆತನದವರ ನ್ಯಾಯಾ ಧಿಪತಿಗಳೇ, ನ್ಯಾಯವನ್ನು ಅಸಹ್ಯಿಸಿ ಎಲ್ಲಾ ಯಥಾರ್ಥ ತ್ವವನ್ನು ಡೊಂಕು ಮಾಡುವವರೇ,
3:10b.MIC.003.010 ಚೀಯೋನನ್ನು ರಕ್ತದಿಂದಲೂ ಯೆರೂಸಲೇಮನ್ನು ಅಕ್ರಮದಿಂದಲೂ ಕಟ್ಟುವವರೇ, ಈಗ ಇದನ್ನು ಕೇಳಿರಿ.
3:11b.MIC.003.011 ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ; ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ; ಅದರ ಪ್ರವಾ ದಿಗಳು ಹಣಕ್ಕೆ ಶಕುನ ಹೇಳುತ್ತಾರೆ; ಆದರೂ ಕರ್ತನ ಮೇಲೆ ಆತುಕೊಂಡು--ಕರ್ತನು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವದಿಲ್ಲ ಅನ್ನು ತ್ತಾರೆ.ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
3:12b.MIC.003.012 ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
4
4:1b.MIC.004.001 ಅಂತ್ಯದಿವಸಗಳಲ್ಲಿ ಆಗುವದೇನಂದರೆ, ಕರ್ತನ ಆಲಯದ ಪರ್ವತವು ಬೆಟ್ಟಗಳ ತುದಿಯಲ್ಲಿ ನೆಲೆಯಾಗಿ ಗುಡ್ಡಗಳಿಗಿಂತ ಎತ್ತರ ವಾಗಿರುವದು; ಜನಗಳು ಅದರ ಬಳಿಗೆ ಪ್ರವಾಹದಂತೆ ಬರುವರು.
4:2b.MIC.004.002 ಅನೇಕ ಜನಾಂಗಗಳು ಬಂದು ಹೇಳುವ ದೇನಂದರೆ--ಬನ್ನಿರಿ; ಕರ್ತನ ಬೆಟ್ಟಕ್ಕೆ ಯಾಕೋಬಿನ ದೇವರ ಆಲಯಕ್ಕೆ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ಹಾದಿಗಳಲ್ಲಿ ನಡೆಯುವೆವು; ಯಾಕಂದರೆ ಚೀಯೋನಿನೊಳಗಿಂದ ನ್ಯಾಯಪ್ರಮಾಣವೂ ಯೆರೂ ಸಲೇಮಿನೊಳಗಿಂದ ದೇವರ ವಾಕ್ಯವೂ ಹೊರಡು ವದು.
4:3b.MIC.004.003 ಆಗ ಆತನು ಅನೇಕ ಜನಗಳ ಮಧ್ಯದಲ್ಲಿ ನ್ಯಾಯತೀರಿಸಿ ದೂರದಲ್ಲಿರುವ ಬಲವಾದ ಜನಾಂಗ ಗಳಿಗೆ ತೀರ್ಪುಕೊಡುವನು; ಅವರು ತಮ್ಮ ಕತ್ತಿಗಳನ್ನು ನೇಗಲಿನ ಗುಳಗಳಾಗಿಯೂ ತಮ್ಮ ಈಟಿಗಳನ್ನು ಕುಡು ಗೋಲುಗಳಾಗಿಯೂ ಮಾಡುವರು; ಜನಾಂಗವು ಜನಾಂಗದ ಮೇಲೆ ಕತ್ತಿಯನ್ನು ಎತ್ತದು; ಯುದ್ಧಾಭ್ಯಾಸ ಇನ್ನು ಮೇಲೆ ಇರದು.
4:4b.MIC.004.004 ಆದರೆ ಒಬ್ಬೊಬ್ಬನು ತನ್ನ ತನ್ನ ದ್ರಾಕ್ಷೇ ಬಳ್ಳಿಯ ಕೆಳಗೂ ತನ್ನ ತನ್ನ ಅಂಜೂರದ ಗಿಡದ ಕೆಳಗೂ ಕೂತುಕೊಳ್ಳುವನು. ಭಯಪಡಿಸುವವನು ಯಾರೂ ಇರುವದಿಲ್ಲ. ಯಾಕಂದರೆ ಸೈನ್ಯಗಳ ಕರ್ತನ ಬಾಯಿ ಅದನ್ನು ನುಡಿದಿದೆ.
4:5b.MIC.004.005 ಎಲ್ಲಾ ಜನಗಳಲ್ಲಿ ಪ್ರತಿಯೊಬ್ಬನು ತನ್ನ ತನ್ನ ದೇವರ ಹೆಸರಿನಲ್ಲಿ ನಡೆ ಯುವನು; ಆದರೆ ನಾವು ನಮ್ಮ ದೇವರಾದ ಕರ್ತನ ಹೆಸರಿನಲ್ಲಿ ಎಂದೆಂದಿಗೂ ನಡೆಯುವೆವು.
4:6b.MIC.004.006 ಕರ್ತನು ಹೀಗೆ ಅನ್ನುತ್ತಾನೆ--ಆ ದಿನದಲ್ಲಿ ಕುಂಟಾದದ್ದನ್ನು ಕೂಡಿಸಿ ತಳ್ಳಿಬಿಟ್ಟದ್ದನ್ನೂ ನಾನು ಕಷ್ಟಪಡಿಸಿದವರನ್ನೂ ಒಟ್ಟುಗೂಡಿಸುವೆನು.
4:7b.MIC.004.007 ಕುಂಟಾದದ್ದನ್ನು ಉಳಿದದ್ದ ನ್ನಾಗಿಯೂ ತಳ್ಳಿಬಿಟ್ಟಿದ್ದನ್ನು ಬಲವಾದ ಜನಾಂಗವಾ ಗಿಯೂ ಮಾಡುವೆನು; ಕರ್ತನು ಇಂದಿನಿಂದ ಸದಾ ಕಾಲವೂ ಚೀಯೋನ್ ಪರ್ವತದಲ್ಲಿ ಅವರ ಮೇಲೆ ಆಳುವನು,
4:8b.MIC.004.008 ಇದಲ್ಲದೆ ನೀನು ಮಂದೆಯ ಬುರುಜೇ ಚೀಯೋನಿನ ಕುಮಾರ್ತೆಯ ದುರ್ಗವೇ, ನಿನಗೆ ಬರು ವದು, ಹೌದು, ಮೊದಲನೇ ದೊರೆತನವೂ ಯೆರೂ ಸಲೇಮಿನ ಕುಮಾರ್ತೆಗೆ ರಾಜ್ಯವೂ ಬರುವದು.
4:9b.MIC.004.009 ಈಗ ಯಾಕೆ ಗಟ್ಟಿಯಾಗಿ ಕೂಗುತ್ತೀ? ನಿನ್ನಲ್ಲಿ ಅರಸನಿಲ್ಲವೋ? ನಿನ್ನ ಆಲೋಚನಾಕರ್ತನು ನಾಶ ವಾದನೋ? ಹೆರುವವಳಂತೆ ನಿನಗೆ ವೇದನೆ ಬಂತು.
4:10b.MIC.004.010 ಚೀಯೋನಿನ ಕುಮಾರ್ತೆಯೇ, ಹೆರುವವಳಂತೆ ವೇದನೆಪಡು. ಈಗ ಪಟ್ಟಣದೊಳಗಿಂದ ಹೊರಟು ಹೊಲದಲ್ಲಿ ವಾಸಮಾಡಿ ಬಾಬೆಲಿಗೆ ಹೋಗುವಿ; ಅಲ್ಲಿ ನಿನಗೆ ಬಿಡುಗಡೆಯಾಗುವದು; ಅಲ್ಲಿ ಕರ್ತನು ನಿನ್ನನ್ನು ನಿನ್ನ ಶತ್ರುಗಳ ಕೈಯೊಳಗಿಂದ ವಿಮೋಚಿ ಸುವನು.
4:11b.MIC.004.011 ಆದರೆ ಈಗ ಅನೇಕ ಜನಾಂಗಗಳು ನಿನಗೆ ವಿರೋಧವಾಗಿ ಕೂಡಿಬಂದಿವೆ; ಅವರು--ಅವಳು ಕೆಡಿಸಲ್ಪಡಲಿ, ಚೀಯೋನಿನ ಮೇಲೆ ನಮ್ಮ ಕಣ್ಣುಗಳು ದೃಷ್ಟಿಸಲಿ ಎಂದು ಹೇಳುತ್ತಾರೆ.
4:12b.MIC.004.012 ಆದರೆ ಕರ್ತನ ಯೋಚನೆಗಳು ಅವರಿಗೆ ತಿಳಿಯವು, ಆತನ ಆಲೋಚನೆಯನ್ನು ಅವರು ಗ್ರಹಿಸಲಿಲ್ಲ; ಕಣದಲ್ಲಿ ಸಿವುಡುಗಳ ಹಾಗೆ ಅವರನ್ನು ಕೂಡಿಸುವನು.ಚೀಯೋನಿನ ಕುಮಾರ್ತೆಯೇ; ಎದ್ದು ತುಳಿ. ನಿನ್ನ ಕೊಂಬನ್ನು ಕಬ್ಬಿಣವಾಗಿಯೂ ನಿನ್ನ ಗೊರಸೆಗಳನ್ನು ತಾಮ್ರವಾಗಿಯೂ ಮಾಡುವೆನು. ನೀನು ಅನೇಕ ಜನಗಳನ್ನು ಪುಡಿಪುಡಿಮಾಡುವಿ; ಮತ್ತು ಅವರ ಲಾಭವನ್ನು ಕರ್ತನಿಗೂ ಅವರ ಸಂಪತ್ತನ್ನು ಸಮಸ್ತ ಭೂಮಿಯ ಕರ್ತನಿಗೂ ಪ್ರತಿಷ್ಠೆ ಮಾಡುವೆನು.
4:13b.MIC.004.013 ಚೀಯೋನಿನ ಕುಮಾರ್ತೆಯೇ; ಎದ್ದು ತುಳಿ. ನಿನ್ನ ಕೊಂಬನ್ನು ಕಬ್ಬಿಣವಾಗಿಯೂ ನಿನ್ನ ಗೊರಸೆಗಳನ್ನು ತಾಮ್ರವಾಗಿಯೂ ಮಾಡುವೆನು. ನೀನು ಅನೇಕ ಜನಗಳನ್ನು ಪುಡಿಪುಡಿಮಾಡುವಿ; ಮತ್ತು ಅವರ ಲಾಭವನ್ನು ಕರ್ತನಿಗೂ ಅವರ ಸಂಪತ್ತನ್ನು ಸಮಸ್ತ ಭೂಮಿಯ ಕರ್ತನಿಗೂ ಪ್ರತಿಷ್ಠೆ ಮಾಡುವೆನು.
5
5:1b.MIC.005.001 ಈಗ ಓ ಸೈನ್ಯಗಳ ಕುಮಾರ್ತೆಯೇ, ಗುಂಪುಗಳಾಗಿ ಕೂಡಿಕೊಳ್ಳಿರಿ; ಅವನು ನಮಗೆ ಮುತ್ತಿಗೆ ಹಾಕಿದ್ದಾನೆ. ಇಸ್ರಾಯೇಲಿನ ನ್ಯಾಯಾಧಿಪತಿಯನ್ನು ಕೋಲಿನಿಂದ ಕೆನ್ನೆಯ ಮೇಲೆ ಹೊಡೆಯುತ್ತಾರೆ.
5:2b.MIC.005.002 ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಸಾವಿರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳ ಗಿಂದ ನನಗಾಗಿ ಹೊರಡುವನು; ಆತನ ಹೊರಡೋಣ ಗಳು ಪೂರ್ವದಿಂದಲೂ ಅನಾದಿ ದಿವಸಗಳಿಂದಲೂ ಅವೆ.
5:3b.MIC.005.003 ಆದದರಿಂದ ಹೆರುವವಳು ಹೆರುವ ಕಾಲದ ವರೆಗೂ ಅವನು ಅವರನ್ನು ಒಪ್ಪಿಸಿಬಿಡುವನು; ಆಗ ಅವನ ಸಹೋದರರಲ್ಲಿ ಉಳಿದವರು ಇಸ್ರಾಯೇಲಿನ ಮಕ್ಕಳ ಬಳಿಗೆ ಹಿಂದಿರುಗುವರು.
5:4b.MIC.005.004 ಆತನು ಕರ್ತನ ಬಲದಲ್ಲಿಯೂ ತನ್ನ ದೇವರಾದ ಕರ್ತನ ಹೆಸರಿನಲ್ಲಿ ಘನತೆಯಲ್ಲಿಯೂ ನಿಂತುಕೊಂಡು ಮೇಯಿಸುವನು; ಮತ್ತು ಅವರು ನೆಲೆಯಾಗಿರುವರು, ಈಗ ಆತನು ಭೂಮಿಯ ಅಂತ್ಯಗಳ ಮಟ್ಟಿಗೂ ದೊಡ್ಡವನಾಗಿ ರುವನು.
5:5b.MIC.005.005 ಇದಲ್ಲದೆ ಅಶ್ಶೂರ್ಯನು ನಮ್ಮ ದೇಶದಲ್ಲಿ ಬಂದಾಗ ಈತನೇ ಸಮಾಧಾನವಾಗಿರುವನು; ನಮ್ಮ ಅರಮನೆಗಳಲ್ಲಿ ಅವನು ತುಳಿಯುವಾಗ ನಾವು ಆತನಿಗೆ ವಿರೋಧವಾಗಿ ಏಳು ಕುರುಬರನ್ನೂ ಎಂಟು ಮುಖ್ಯ ಮನುಷ್ಯರನ್ನೂ ಎಬ್ಬಿಸುವೆವು.
5:6b.MIC.005.006 ಅವರು ಅಶ್ಶೂರಿನ ದೇಶವನ್ನು ಕತ್ತಿಯಿಂದಲೂ ನಿಮ್ರೋದನ ದೇಶವನ್ನು ಅದರ ಪ್ರವೇಶಗಳಲ್ಲಿಯೂ ಹಾಳುಮಾಡುವರು; ಅಶ್ಶೂರ್ಯನು ನಮ್ಮ ದೇಶದಲ್ಲಿ ಬಂದು ನಮ್ಮ ಪ್ರಾಂತ್ಯಗಳಲ್ಲಿ ತುಳಿಯುವಾಗ ಆತನು ನಮ್ಮನ್ನು ತಪ್ಪಿಸುವನು.
5:7b.MIC.005.007 ಇದಲ್ಲದೆ ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ ಕರ್ತನಿಂದ ಮಂಜಿನ ಹಾಗೆಯೂ ಹುಲ್ಲಿನ ಮೇಲೆ ಜಡಿಮಳೆಯ ಹಾಗೆಯೂ ಇರುವದು; ಅದು ಮನುಷ್ಯರಿಗೊಸ್ಕರ ತಡೆಮಾಡುವ ದಿಲ್ಲ; ಮನುಷ್ಯನ ಮಕ್ಕಳಿಗೋಸ್ಕರ ಕಾದುಕೊಳ್ಳುವದಿಲ್ಲ.
5:8b.MIC.005.008 ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ, ಜನಾಂಗಗಳೊಳಗೆ ಅಡವಿಯ ಮೃಗಗಳಲ್ಲಿ ಸಿಂಹದಂತೆಯೂ ಕುರಿಮಂದೆಗಳಲ್ಲಿ ಪ್ರಾಯದ ಸಿಂಹದಂತೆಯೂ ಇರುವದು; ಅದು ಹಾದುಹೋದರೆ ಇಳಿದುಬಿಟ್ಟು ಹರಿದುಬಿಡುತ್ತದೆ, ಯಾರೂ ಬಿಡಿಸ ಲಾರರು.
5:9b.MIC.005.009 ನಿನ್ನ ಕೈ ನಿನ್ನ ವೈರಿಗಳೆಲ್ಲರ ಮೇಲೆ ಉನ್ನತ ವಾಗಿರುವದು; ನಿನ್ನ ಶತ್ರುಗಳೆಲ್ಲರು ಕಡಿದು ಬಿಡಲ್ಪಡುವರು.
5:10b.MIC.005.010 ಕರ್ತನು ಹೀಗೆ ಅನ್ನುತ್ತಾನೆ--ಆ ದಿನದಲ್ಲಿ ಆಗುವದೇನಂದರೆ--ನಾನು ನಿನ್ನ ಮಧ್ಯದೊಳಗಿಂದ ನಿನ್ನ ಕುದುರೆಗಳನ್ನು ಕಡಿದುಬಿಟ್ಟು ನಿನ್ನ ರಥಗಳನ್ನು ನಾಶಮಾಡುವೆನು.
5:11b.MIC.005.011 ನಿನ್ನ ದೇಶದ ಪಟ್ಟಣಗಳನ್ನು ಕಡಿದುಬಿಟ್ಟು ನಿನ್ನ ಕೋಟೆಗಳನ್ನೆಲ್ಲಾ ಕೆಡವಿಹಾಕುವೆನು.
5:12b.MIC.005.012 ನಿನ್ನ ಕೈಯೊಳಗಿಂದ ಮಂತ್ರತಂತ್ರವನ್ನು ಕಡಿದು ಬಿಡುವೆನು; ಕಣಿ ಹೇಳುವವರು ನಿನಗೆ ಇನ್ನು ಇರು ವದಿಲ್ಲ.
5:13b.MIC.005.013 ನಿನ್ನ ಕೆತ್ತಿದ ವಿಗ್ರಹಗಳನ್ನೂ ನಿಂತಿರುವ ನಿನ್ನ ಪ್ರತಿಮೆಗಳನ್ನೂ ನಿನ್ನ ಮಧ್ಯದೊಳಗಿಂದ ಕಡಿದು ಬಿಡುವೆನು; ನೀನು ಇನ್ನು ಸ್ವಂತ ಕೈಕೆಲಸಗಳನ್ನು ಆರಾಧಿಸುವದಿಲ್ಲ.
5:14b.MIC.005.014 ನಿನ್ನ ತೋಪುಗಳನ್ನು ನಿನ್ನ ಮಧ್ಯ ದೊಳಗಿಂದ ಕಿತ್ತುಹಾಕಿ ನಿನ್ನ ಪಟ್ಟಣಗಳನ್ನು ನಾಶ ಮಾಡುವೆನು.ಇದಲ್ಲದೆ ಕಿವಿಗೊಡದೆ ಇದ್ದ ಜನಾಂಗಗಳಿಗೆ ಕೋಪದಿಂದಲೂ ಉಗ್ರದಿಂದಲೂ ಮುಯ್ಯಿ ತೀರಿಸುವೆನು.
5:15b.MIC.005.015 ಇದಲ್ಲದೆ ಕಿವಿಗೊಡದೆ ಇದ್ದ ಜನಾಂಗಗಳಿಗೆ ಕೋಪದಿಂದಲೂ ಉಗ್ರದಿಂದಲೂ ಮುಯ್ಯಿ ತೀರಿಸುವೆನು.
6
6:1b.MIC.006.001 ಕರ್ತನು ಹೇಳುವದನ್ನು ಈಗ ಕೇಳಿರಿ--ಎದ್ದೇಳು,ಬೆಟ್ಟಗಳ ಮುಂದೆ ವ್ಯಾಜ್ಯವಾಡು; ಗುಡ್ಡಗಳು ನಿನ್ನ ಶಬ್ದವನ್ನು ಕೇಳಲಿ.
6:2b.MIC.006.002 ಓ ಬೆಟ್ಟಗಳೇ, ಭೂಮಿಯ ಬಲವಾದ ಅಸ್ತಿವಾರಗಳಾದ ಬಂಡೆಗಳೇ, ಕರ್ತನ ವ್ಯಾಜ್ಯವನ್ನು ಕೇಳಿರಿ; ಕರ್ತನಿಗೆ ತನ್ನ ಜನರ ಸಂಗಡ ವ್ಯಾಜ್ಯ ಉಂಟು, ಇಸ್ರಾಯೇಲಿನ ಸಂಗಡ ಆತನು ತರ್ಕಿಸುತ್ತಾನೆ.
6:3b.MIC.006.003 ನನ್ನ ಜನರೇ, ನಾನು ನಿನಗೆ ಏನು ಮಾಡಿದ್ದೇನೆ? ಯಾವದರಿಂದ ನಿನಗೆ ಬೇಸರ ಮಾಡಿದ್ದೇನೆ? ನನಗೆ ವಿರೋಧವಾಗಿ ಸಾಕ್ಷಿಕೊಡು.
6:4b.MIC.006.004 ನಾನು ಐಗುಪ್ತದೇಶದೊಳಗಿಂದ ನಿನ್ನನ್ನು ಮೇಲೆ ಬರಮಾಡಿ, ದಾಸರ ಮನೆಯೊಳಗಿಂದ ನಿನ್ನನ್ನು ವಿಮೋ ಚಿಸಿ, ಮೋಶೆಯನ್ನೂ ಆರೋನನನ್ನೂ ಮಿರಿಯಾಮ ಳನ್ನೂ ನಿನ್ನ ಮುಂದೆ ಕಳುಹಿಸಿದೆನು.
6:5b.MIC.006.005 ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಯೋಚಿಸಿ ದ್ದನ್ನೂ ಬೆಯೋರನ ಮಗನಾದ ಬಿಳಾಮನು ಅವನಿಗೆ ಉತ್ತರವಾಗಿ ಹೇಳಿದ್ದನ್ನೂ ಶಿಟ್ಟೀಮು ಮೊದಲು ಗೊಂಡು ಗಿಲ್ಗಾಲಿನ ವರೆಗೂ ಆದದ್ದನ್ನೂ ಈಗ ಜ್ಞಾಪಕ ಮಾಡಿಕೊಳ್ಳಿರಿ. ಆಗ ಕರ್ತನ ನೀತಿಯನ್ನು ತಿಳುಕೊಳ್ಳು ವಿರಿ.
6:6b.MIC.006.006 ನಾನು ಯಾವದರೊಂದಿಗೆ ಕರ್ತನ ಮುಂದೆ ಬರಲಿ? ಯಾವದರೊಂದಿಗೆ ಉನ್ನತವಾದ ದೇವರ ಮುಂದೆ ಅಡ್ಡಬೀಳಲಿ? ದಹನಬಲಿಗಳ ಸಂಗಡವೂ ಒಂದು ವರುಷದ ಕರುಗಳ ಸಂಗಡವೂ ಆತನ ಮುಂದೆ ಬರಲೋ?
6:7b.MIC.006.007 ಸಾವಿರ ಟಗರುಗಳಿಗಾದರೂ ಎಣ್ಣೆಯ ಹತ್ತು ಸಾವಿರ ನದಿಗಳಿಗಾದರೂ ಕರ್ತನು ಮೆಚ್ಚು ವನೋ? ನನ್ನ ದ್ರೋಹಕ್ಕಾಗಿ ನನ್ನ ಚೊಚ್ಚಲ ಮಗ ನನ್ನೂ ನನ್ನ ಆತ್ಮದ ಪಾಪಕ್ಕಾಗಿ ನನ್ನ ಗರ್ಭದ ಫಲ ವನ್ನೂ ಕೊಡಲೋ?
6:8b.MIC.006.008 ಮನುಷ್ಯನೇ, ಉತ್ತಮವಾದ ದ್ದನ್ನು ನಿನಗೆ ಆತನು ತಿಳಿಸಿದ್ದಾನೆ; ಹೌದು, ನ್ಯಾಯ ವನ್ನು ಮಾಡುವದೂ ಕರುಣೆಯನ್ನು ಪ್ರೀತಿಮಾಡು ವದೂ ನಿನ್ನ ದೇವರ ಸಂಗಡ ವಿನಯವಾಗಿ ನಡ ಕೊಳ್ಳುವದೂ ಇದನ್ನೇ ಹೊರತು ಕರ್ತನು ಇನ್ನೇನು ನಿನ್ನಿಂದ ಕೇಳುತ್ತಾನೆ.
6:9b.MIC.006.009 ಕರ್ತನ ಸ್ವರವು ಪಟ್ಟಣಕ್ಕೆ ಕೂಗುತ್ತದೆ, ಮತ್ತು ಬುದ್ಧಿವಂತನು ನಿನ್ನ ಹೆಸರನ್ನು ನೋಡುವನು; ಬೆತ್ತ ವನ್ನೂ ಅದನ್ನು ನೇಮಿಸಿದವನನ್ನೂ ಕೇಳಿರಿ.
6:10b.MIC.006.010 ದುಷ್ಟರ ಮನೆಯಲ್ಲಿ ದುಷ್ಟತ್ವದ ಬೊಕ್ಕಸಗಳೂ ಅಸಹ್ಯವಾದಂಥ ಕಡಿಮೆಯಾದ ಅಳತೆಯೂ ಉಂಟೋ?
6:11b.MIC.006.011 ನಾನು ದುಷ್ಟತ್ವದ ತ್ರಾಸುಗಳುಳ್ಳವರನ್ನು ಮೋಸವಾದ ಕಲ್ಲು ಗಳ ಚೀಲವುಳ್ಳವರನ್ನು ನಿರ್ಮಲರೆಂದೆಣಿಸುವೆನೋ?
6:12b.MIC.006.012 ಅದರ ಐಶ್ವರ್ಯವಂತರು ಬಲಾತ್ಕಾರದಿಂದ ತುಂಬಿ ದ್ದಾರೆ, ಅದರ ನಿವಾಸಿಗಳು ಸುಳ್ಳುಗಳನ್ನು ಹೇಳುವವ ರಾಗಿದ್ದಾರೆ; ಅವರ ನಾಲಿಗೆ ಅವರ ಬಾಯಿಯಲ್ಲಿ ಕಪಟವುಳ್ಳದ್ದೇ.
6:13b.MIC.006.013 ಆದದರಿಂದ ನಾನು ಸಹ ನಿನ್ನನ್ನು ಹೊಡೆದು ನಿನಗೆ ರೋಗವನ್ನು ಬರಮಾಡುವೆನು; ನಿನ್ನ ಪಾಪಗಳ ನಿಮಿತ್ತ ನಿನ್ನನ್ನು ಹಾಳುಮಾಡುವೆನು.
6:14b.MIC.006.014 ನೀನು ಉಂಡು ತೃಪ್ತಿಯಾಗದೆ ಇರುವಿ; ನಿನ್ನೊಳಗೆ ನಿನ್ನ ಬೀಳ್ವಿಕೆಯು ಇರುವದು; ನೀನು ಹಿಡಿದು ತಪ್ಪಿಸದೆ ಇರುವಿ; ನೀನು ತಪ್ಪಿಸುವಂಥದ್ದನ್ನು ನಾನು ಕತ್ತಿಗೆ ಒಪ್ಪಿಸುವೆನು.
6:15b.MIC.006.015 ನೀನು ಬೀಜ ಬಿತ್ತಿ ಕೊಯ್ಯದೆ ಇರುವಿ; ಇಪ್ಪೆಗಳನ್ನು ತುಳಿದು ಎಣ್ಣೆ ಹಚ್ಚಿಕೊಳ್ಳದೆ ಇರುವಿ; ದ್ರಾಕ್ಷಾರಸ ಮಾಡಿ ಕುಡಿಯದೆ ಇರುವಿ.ಒಮ್ರಿಯ ನಿಯಮಗಳನ್ನೂ ಅಹಾಬನ ಮನೆಯ ಸಮಸ್ತ ಕ್ರಿಯೆಗಳನ್ನೂ ಕೈಕೊಳ್ಳುತ್ತೀರಿ; ನಾನು ನಿನ್ನನ್ನು ಹಾಳಾ ಗಿಯೂ ಅದರ ನಿವಾಸಿಗಳನ್ನು ಸಿಳ್ಳಿಡುವಿಕೆಗಾಗಿಯೂ ಮಾಡುವ ಹಾಗೆ ಅವರ ಆಲೋಚನೆಗಳಲ್ಲಿ ನಡ ಕೊಳ್ಳುತ್ತೀರಿ; ಆದದರಿಂದ ನನ್ನ ಜನರ ನಿಂದೆಯನ್ನು ಹೊರುವಿರಿ.
6:16b.MIC.006.016 ಒಮ್ರಿಯ ನಿಯಮಗಳನ್ನೂ ಅಹಾಬನ ಮನೆಯ ಸಮಸ್ತ ಕ್ರಿಯೆಗಳನ್ನೂ ಕೈಕೊಳ್ಳುತ್ತೀರಿ; ನಾನು ನಿನ್ನನ್ನು ಹಾಳಾ ಗಿಯೂ ಅದರ ನಿವಾಸಿಗಳನ್ನು ಸಿಳ್ಳಿಡುವಿಕೆಗಾಗಿಯೂ ಮಾಡುವ ಹಾಗೆ ಅವರ ಆಲೋಚನೆಗಳಲ್ಲಿ ನಡ ಕೊಳ್ಳುತ್ತೀರಿ; ಆದದರಿಂದ ನನ್ನ ಜನರ ನಿಂದೆಯನ್ನು ಹೊರುವಿರಿ.
7
7:1b.MIC.007.001 ನನಗೆ ಅಯ್ಯೋ, ಯಾಕಂದರೆ ನಾನು ಬೇಸಿಗೆ ಕಾಲದ ಹಣ್ಣುಗಳನ್ನು ಕೂಡಿಸುವ ವರ ಹಾಗೆಯೂ ದ್ರಾಕ್ಷೇ ಸುಗ್ಗಿಯಲ್ಲಿ ಹಕ್ಕಲು ಆರಿಸುವವರ ಹಾಗೆಯೂ ಇದ್ದೇನೆ; ತಿನ್ನುವದಕ್ಕೆ ಗೊನೆ ಇಲ್ಲ. ನನ್ನ ಪ್ರಾಣವು ಮೊದಲು ಹಣ್ಣಾದ ಅಂಜೂರ ವನ್ನು ಅಪೇಕ್ಷಿಸಿಯದೆ.
7:2b.MIC.007.002 ಒಳ್ಳೆಯವನು ಭೂಮಿಯೊಳ ಗಿಂದ ನಾಶವಾಗಿದ್ದಾನೆ; ಮನುಷ್ಯರಲ್ಲಿ ಯಥಾರ್ಥನು ಇಲ್ಲ; ಅವರೆಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾರೆ; ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ.
7:3b.MIC.007.003 ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವ ಹಾಗೆ ಪ್ರಧಾನನೂ ನ್ಯಾಯಾಧಿಪತಿಯೂ ಬಹುಮಾನವನ್ನು ಕೇಳುತ್ತಾರೆ; ದೊಡ್ಡ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರು ಒಂದೇ ಕಟ್ಟಾಗಿದ್ದಾರೆ.
7:4b.MIC.007.004 ಅವರಲ್ಲಿ ಉತ್ತಮನು ದತ್ತೂರಿಯ ಹಾಗೆಯೂ ಬಹು ಯಥಾರ್ಥನು ಮುಳ್ಳಿನ ಬೇಲಿಯ ಹಾಗೆಯೂ ಇದ್ದಾನೆ; ನಿನ್ನ ಕಾವಲುಗಾರರ ದಿವಸವೂ ನಿನ್ನ ವಿಚಾರಣೆಯೂ ಬರುತ್ತದೆ, ಈಗಲೇ ಅವರಿಗೆ ಗಾಬರಿಯಾಗುವದು.
7:5b.MIC.007.005 ಸ್ನೇಹಿತನಲ್ಲಿ ನಂಬಿಕೆ ಇಡಬೇಡಿರಿ; ಆಪ್ತಸ್ನೇಹಿತನಲ್ಲಿ ಭರವಸವಿಡಬೇಡಿರಿ; ನಿನ್ನ ಎದೆಯ ಮೇಲೆ ಮಲಗುವವಳಿಗೆ ನಿನ್ನ ಬಾಯಿಯ ಬಾಗಲುಗಳನ್ನು ಕಾಯಿ.
7:6b.MIC.007.006 ಮಗನು ತನ್ನ ತಂದೆಯನ್ನು ಅವಮಾನ ಮಾಡುತ್ತಾನೆ; ಮಗಳು ತನ್ನ ತಾಯಿಗೂ ಸೊಸೆಯು ತನ್ನ ಅತ್ತೆಗೂ ವಿರೋಧವಾಗಿ ಏಳುತ್ತಾರೆ; ಒಬ್ಬ ಮನುಷ್ಯನಿಗೆ ಸ್ವಂತ ಮನೆಯವರೇ ಶತ್ರುಗಳು.
7:7b.MIC.007.007 ಆದರೆ ನಾನು ಕರ್ತನನ್ನು ಎದುರು ನೋಡುವೆನು; ನನ್ನ ರಕ್ಷಣೆಯ ದೇವರಿಗೋಸ್ಕರ ಕಾದುಕೊಳ್ಳುವೆನು; ನನ್ನ ದೇವರು ನನ್ನನ್ನು ಕೇಳುವನು.
7:8b.MIC.007.008 ನನ್ನ ಶತ್ರುವೇ, ನನ್ನ ಮೇಲೆ ಸಂತೋಷಪಡಬೇಡ; ನಾನು ಬಿದ್ದಿದ್ದರೂ ತಿರುಗಿ ಏಳುವೆನು; ಕತ್ತಲೆಯಲ್ಲಿ ಕೂತುಕೊಂಡರೂ ನನಗೆ ಬೆಳಕು ಕರ್ತನೇ.
7:9b.MIC.007.009 ನಾನು ಕರ್ತನಿಗೆ ವಿರೋಧ ವಾಗಿ ಪಾಪ ಮಾಡಿದ್ದರಿಂದ ಆತನು ತನ್ನ ವ್ಯಾಜ್ಯವಾಡಿ ನನ್ನ ನ್ಯಾಯವನ್ನು ನಡಿಸುವ ತನಕ ಆತನ ಕೋಪವನ್ನು ತಾಳುವೆನು; ಆತನು ನನ್ನನ್ನು ಬೆಳಕಿಗೆ ತರುವನು, ಆತನ ನೀತಿಯನ್ನು ನೋಡುವೆನು.
7:10b.MIC.007.010 ನನ್ನ ಶತ್ರುಗಳು ಸಹ ಅದನ್ನು ನೋಡುವರು; ನಿನ್ನ ದೇವರಾದ ಕರ್ತನು ಎಲ್ಲಿ ಎಂದು ನನಗೆ ಹೇಳಿದವಳನ್ನು ನಾಚಿಕೆಯು ಮುಚ್ಚುವದು; ನನ್ನ ಕಣ್ಣುಗಳು ಅವಳನ್ನು ನೋಡುವವು, ಈಗಲೇ ಬೀದಿಗಳಲ್ಲಿರುವ ಕೆಸರಿನಂತೆ ತುಳಿಯಲ್ಪಡು ವಳು.
7:11b.MIC.007.011 ನಿನ್ನ ಗೋಡೆಗಳು ತಿರುಗಿ ಕಟ್ಟಲ್ಪಡುವ ಆ ದಿನದಲ್ಲಿ ನಿರ್ಣಯವು ದೂರವಾಗಿ ಹೋಗುವದು.
7:12b.MIC.007.012 ಆ ದಿನದಲ್ಲಿ ಅಶ್ಶೂರಿನಿಂದಲೂ ಕೋಟೆಯುಳ್ಳ ಪಟ್ಟಣಗಳಿಂದಲೂ ಕೋಟೆಯಿಂದ ನದಿಯವರೆಗೂ ಸಮುದ್ರದಿಂದ ಸಮುದ್ರದ ವರೆಗೂ ಬೆಟ್ಟದಿಂದ ಬೆಟ್ಟದ ವರೆಗೂ ನಿನ್ನ ಬಳಿಗೆ ಬರುವರು.
7:13b.MIC.007.013 ಆದರೂ ದೇಶವು ಅದರ ನಿವಾಸಿಗಳ ನಿಮಿತ್ತ ಅವರ ದುಷ್ಕ್ರಿಯೆಗಳ ಫಲದಿಂದ ಹಾಳಾಗುವದು.
7:14b.MIC.007.014 ನಿನ್ನ ಜನರನ್ನೂ ಏಕಾಂತವಾಗಿ ಅಡವಿಯಲ್ಲಿ ಕರ್ಮೆಲಿನ ನಡುವೆ ವಾಸವಾಗಿರುವ ನಿನ್ನ ಬಾಧ್ಯತೆಯ ಮಂದೆ ಯನ್ನೂ ನಿನ್ನ ಕೋಲಿನಿಂದ ಮೇಯಿಸು; ಅವರು ಪೂರ್ವದ ದಿವಸಗಳಲ್ಲಾದ ಹಾಗೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.
7:15b.MIC.007.015 ನೀನು ಐಗುಪ್ತ ದೇಶದೊಳಗಿಂದ ಹೊರಡುವ ದಿವಸಗಳ ಹಾಗೆ ಅವನಿಗೆ ಆಶ್ಚರ್ಯವಾದವುಗಳನ್ನು ತೋರಿಸುವೆನು.
7:16b.MIC.007.016 ಜನಾಂಗಗಳು ನೋಡಿ ತಮ್ಮ ತ್ರಾಣಕ್ಕೆಲ್ಲಾ ನಾಚಿಕೆ ಪಡುವರು; ತಮ್ಮ ಕೈಗಳನ್ನು ಬಾಯಿಯ ಮೇಲೆ ಇಡುವರು; ಅವರ ಕಿವಿಗಳು ಕಿವುಡಾಗಿ ಹೋಗುವವು.
7:17b.MIC.007.017 ಅವರು ಸರ್ಪದಂತೆ ಧೂಳನ್ನು ನೆಕ್ಕುವರು; ಭೂಮಿಯ ಕ್ರಿಮಿಗಳಂತೆ ತಾವು ರಂಧ್ರಗಳಿಂದ ಹೊರಗೆ ಬರುವರು; ನಮ್ಮ ದೇವರಾದ ಕರ್ತನಿಗೆ ಅವರು ಹೆದರುವರು; ನಿನಗೆ ಭಯಪಡುವರು.
7:18b.MIC.007.018 ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ.
7:19b.MIC.007.019 ಆತನು ತಿರುಗಿಕೊಂಡು ನಮ್ಮನ್ನು ಕನಿಕರಿಸುವನು; ನಮ್ಮ ಅಕ್ರಮಗಳನ್ನು ತುಳಿದುಬಿಡುವನು; ಅವರ ಪಾಪಗಳ ನ್ನೆಲ್ಲಾ ಸಮುದ್ರದ ಅಗಾಧಗಳಲ್ಲಿ ಹಾಕುವಿ.ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.
7:20b.MIC.007.020 ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.
- Holder of rights
- Multilingual Bible Corpus
- Citation Suggestion for this Object
- TextGrid Repository (2025). Kannada Collection. Micah (Kannada). Micah (Kannada). Multilingual Parallel Bible Corpus. Multilingual Bible Corpus. https://hdl.handle.net/21.11113/0000-0016-A1D1-5