Zephaniah (Kannada)
1
1:1b.ZEP.001.001 ಯೆಹೂದದ ಅರಸನಾದ ಅಮೋನನ ಮಗನಾದ ಯೋಷೀಯನ ದಿವಸಗಳಲ್ಲಿ ಹಿಜ್ಕೀಯನ ಮಗನಾದ ಅಮರ್ಯನ ಮಗನಾದ ಗೆದಲೀಯನ ಮಗನಾದ ಕೂಶೀಯನ ಮಗನಾದ ಚೆಫನ್ಯನಿಗೆ ಉಂಟಾದ ಕರ್ತನ ದೈವೋಕ್ತಿ
1:2b.ZEP.001.002 ಕರ್ತನು ಹೇಳುವದೇನಂದರೆ--ನಾನು ದೇಶ ದೊಳಗಿಂದ ಎಲ್ಲವುಗಳನ್ನು ಸಂಪೂರ್ಣವಾಗಿ ನಾಶ ಮಾಡುವೆನು.
1:3b.ZEP.001.003 ಮನುಷ್ಯರನ್ನೂ ಮೃಗಗಳನ್ನೂ ನಾಶ ಮಾಡುವೆನು. ಆಕಾಶದ ಪಕ್ಷಿಗಳನ್ನೂ ಸಮುದ್ರದ ವಿಾನುಗಳನ್ನೂ ದುಷ್ಟರ ಸಂಗಡ ಅಭ್ಯಂತರ ಮಾಡುವ ವುಗಳನ್ನೂ ಹಾಳುಮಾಡುವೆನು: ಮನುಷ್ಯರನ್ನು ದೇಶದೊಳಗಿಂದ ಕಡಿದುಬಿಡುವೆನು ಎಂದು ಕರ್ತನು ಅನ್ನುತ್ತಾನೆ.
1:4b.ZEP.001.004 ಯೆಹೂದದ ಮೇಲೆಯೂ ಯೆರೂಸಲೇಮಿನ ಎಲ್ಲಾ ನಿವಾಸಿಗಳ ಮೇಲೆಯೂ ನನ್ನ ಕೈಚಾಚಿ ಈ ಸ್ಥಳದಿಂದ ಬಾಳನ ಉಳಿದವುಗಳನ್ನೂ ಯಾಜಕರ ಸಂಗಡ ಕೆಮಾರ್ಯರ ಹೆಸರನ್ನೂ
1:5b.ZEP.001.005 ಮಾಳಿಗೆಗಳ ಮೇಲೆ ಆಕಾಶದ ಸೈನ್ಯವನ್ನು ಆರಾಧಿಸುವವರನ್ನೂ ಕರ್ತನ ಮೇಲೆಯೂ ಮಲ್ಕಾಮನ ಮೇಲೆಯೂ ಆಣೆ ಇಟ್ಟುಕೊಳ್ಳುವವರನ್ನೂ
1:6b.ZEP.001.006 ಕರ್ತನ ಕಡೆಯಿಂದ ಹಿಂತಿ ರುಗಿದವರನ್ನೂ ಕರ್ತನನ್ನು ಹುಡುಕದೆಯೂ ವಿಚಾರಿಸ ದೆಯೂ ಇರುವವರನ್ನೂ ಕಡಿದುಬಿಡುವೆನು.
1:7b.ZEP.001.007 ಕರ್ತ ನಾದ ದೇವರ ಮುಂದೆ ಮೌನವಾಗಿರ್ರಿ: ಕರ್ತನ ದಿನವು ಸವಿಾಪವಾಗಿದೆ; ಕರ್ತನು ಬಲಿಯನ್ನು ಸಿದ್ಧ ಮಾಡಿದ್ದಾನೆ; ತನ್ನ ಅತಿಥಿಗಳನ್ನು ಆಹ್ವಾನಿಸಿದ್ದಾನೆ.
1:8b.ZEP.001.008 ಕರ್ತನ ಬಲಿಯ ದಿನದಲ್ಲಿ ಆಗುವದೇನಂದರೆ--ನಾನು ಪ್ರಧಾನರನ್ನೂ ಅರಸನ ಕುಮಾರರ ಮಕ್ಕಳನ್ನೂ ಅನ್ಯರ ಉಡುಪನ್ನು ತೊಟ್ಟುಕೊಳ್ಳುವವರೆಲ್ಲರನ್ನೂ ದಂಡಿಸುವೆನು.
1:9b.ZEP.001.009 ಆ ದಿನದಲ್ಲಿ ಹೊಸ್ತಿಲನ್ನು ಹಾರಿ ದಾಟುವವರೆಲ್ಲರನ್ನೂ ತಮ್ಮ ಯಜಮಾನರ ಮನೆ ಗಳನ್ನು ಬಲಾತ್ಕಾರ ಮೋಸಗಳಿಂದ ತುಂಬಿಸುವವರನ್ನೂ ದಂಡಿಸುವೆನು.
1:10b.ZEP.001.010 ಆ ದಿನದಲ್ಲಿ ಆಗುವದೇನಂದರೆ--ವಿಾನುಬಾಗಲಿಂದ ಕೂಗಿನ ಶಬ್ದವೂ ಮತ್ತೊಂದ ರಿಂದ ಗೋಳಾಟವೂ ಗುಡ್ಡಗಳ ಕಡೆಯಿಂದ ದೊಡ್ಡ ಮುರಿಯೋಣವೂ ಇರುವದು.
1:11b.ZEP.001.011 ಮಕ್ತೇಷಿನ ನಿವಾಸಿ ಗಳೇ, ಗೋಳಾಡಿರಿ; ವರ್ತಕರ ಜನರೆಲ್ಲಾ ಸಂಹಾರ ವಾದರು; ಬೆಳ್ಳಿ ಹೊತ್ತವರೆಲ್ಲರೂ ಕಡಿದುಬಿಡಲ್ಪಟ್ಟಿ ದ್ದಾರೆ.
1:12b.ZEP.001.012 ಆ ಕಾಲದಲ್ಲಿ ಆಗುವದೇನಂದರೆ--ನಾನು ಯೆರೂಸಲೇಮನ್ನು ದೀಪಗಳಿಂದ ಶೋಧಿಸುವೆನು; ಕರ್ತನು ಒಳ್ಳೇದನ್ನಾದರೂ ಕೆಟ್ಟದ್ದನ್ನಾದರೂ ಮಾಡು ವದಿಲ್ಲವೆಂದು ತಮ್ಮ ಹೃದಯಗಳಲ್ಲಿ ಅನ್ನುವವರಾಗಿ ಮರೆಯಾದವುಗಳ ಮೇಲೆ ಕಟ್ಟಿಕೊಂಡಿರುವ ಮನುಷ್ಯ ರನ್ನು ದಂಡಿಸುವೆನು.
1:13b.ZEP.001.013 ಆದದರಿಂದ ಅವರ ಸಂಪತ್ತು ಕೊಳ್ಳೆಯಾಗುವದು, ಅವರ ಮನೆಗಳು ಹಾಳಾಗು ವವು; ಅವರು ಮನೆಗಳನ್ನು ಕಟ್ಟಿ ವಾಸಮಾಡರು; ದ್ರಾಕ್ಷೇ ತೋಟಗಳನ್ನು ನೆಟ್ಟು ಅವುಗಳ ರಸವನ್ನು ಕುಡಿಯರು.
1:14b.ZEP.001.014 ಕರ್ತನ ಮಹಾದಿನವು ಸವಿಾಪವಾಗಿದೆ, ಅದು ಬಹು ತ್ವರೆಪಡುತ್ತದೆ; ಕರ್ತನ ದಿನದ ಶಬ್ದವು ತ್ವರೆ ಪಡುತ್ತದೆ; ಶೂರನು ಅಲ್ಲಿ ಘೋರವಾಗಿ ಗೋಳಿಡು ವನು.
1:15b.ZEP.001.015 ಆ ದಿನವು ರೌದ್ರದ ದಿನವು, ಇಕ್ಕಟ್ಟು ಸಂಕಟಗಳ ದಿನವು, ಹಾಳು ಪಾಳುಗಳ ದಿನವು, ಕತ್ತಲೆ ಮೊಬ್ಬುಗಳ ದಿನವು, ಮೇಘ ಮೋಡಗಳ ದಿನವು.
1:16b.ZEP.001.016 ಅದರ ಕೋಟೆಯುಳ್ಳ ಪಟ್ಟಣಗಳಿಗೆ ವಿರೋಧವಾಗಿಯೂ ಉನ್ನತವಾದ ಗೋಪುರಗಳಿಗೆ ವಿರೋಧವಾಗಿಯೂ ತುತೂರಿ ಅರ್ಭಟಗಳ ದಿನವು.
1:17b.ZEP.001.017 ಆಗ ನಾನು ಮನುಷ್ಯರ ಮೇಲೆ ಇಕ್ಕಟ್ಟು ತರಿಸುವೆನು; ಅವರು ಕುರುಡರ ಹಾಗೆ ನಡೆಯುವರು; ಕರ್ತನಿಗೆ ವಿರೋಧವಾಗಿ ಅವರು ಪಾಪಮಾಡಿದ್ದಾರೆ; ಅವರ ರಕ್ತವು ದೂಳಿನಂತೆಯೂ ಅವರ ಮಾಂಸವು ಗೊಬ್ಬರ ದಂತೆಯೂ ಸುರಿಯಲ್ಪಡುವದು.ಕರ್ತನ ರೌದ್ರದ ದಿನದಲ್ಲಿ ಅವರ ಬೆಳ್ಳಿಯಾದರೂ ಅವರ ಬಂಗಾರ ವಾದರೂ ಅವರನ್ನು ತಪ್ಪಿಸಲಾರವು; ಆತನ ಕೋಪದ ಬೆಂಕಿಯು ದೇಶವನ್ನೆಲ್ಲಾ ನುಂಗುವದು.
1:18b.ZEP.001.018 ಕರ್ತನ ರೌದ್ರದ ದಿನದಲ್ಲಿ ಅವರ ಬೆಳ್ಳಿಯಾದರೂ ಅವರ ಬಂಗಾರ ವಾದರೂ ಅವರನ್ನು ತಪ್ಪಿಸಲಾರವು; ಆತನ ಕೋಪದ ಬೆಂಕಿಯು ದೇಶವನ್ನೆಲ್ಲಾ ನುಂಗುವದು.
2
2:1b.ZEP.002.001 ಅಪೇಕ್ಷಿಸಲ್ಪಡದ ಓ ಜನಾಂಗವೇ ನೀವು ಒಟ್ಟಾಗಿ ಕೂಡಿಕೊಳ್ಳಿರಿ, ಹೌದು, ಒಟ್ಟಾಗಿ ಕೂಡಿಕೊಳ್ಳಿರಿ.
2:2b.ZEP.002.002 ನಿರ್ಣಯವು ಬರುವದಕ್ಕಿಂತ ಮುಂಚೆ ಯೂ ದಿನವು ಹೊಟ್ಟಿನಂತೆ ಹಾದುಹೋಗುವದಕ್ಕಿಂತ ಮುಂಚೆಯೂ ಕರ್ತನ ಕೋಪದ ದಿನವು ಉರಿದು ನಿಮ್ಮ ಮೇಲೆ ಬರುವದಕ್ಕಿಂತ ಮುಂಚೆಯೂ ಕೂಡಿ ಕೊಳ್ಳಿರಿ.
2:3b.ZEP.002.003 ಆತನ ನ್ಯಾಯತೀರ್ಪುಗಳನ್ನು ಮಾಡುವ ಲೋಕದ ದೀನರೆಲ್ಲರೇ, ಕರ್ತನನ್ನು ಹುಡುಕಿರಿ, ನೀತಿ ಯನ್ನು ಹುಡುಕಿರಿ, ವಿನಯವನ್ನು ಹುಡುಕಿರಿ; ಒಂದು ವೇಳೆ ಕರ್ತನ ಕೋಪದ ದಿನದಲ್ಲಿ ಮರೆಯಾಗುವಿರಿ.
2:4b.ZEP.002.004 ಗಾಜವು ಕೈಬಿಡಲ್ಪಡುವದು, ಅಷ್ಕೆಲೋನ್ ಹಾಳಾ ಗುವದು, ಅಷ್ಡೋದನ್ನು ಮಧ್ಯಾಹ್ನದಲ್ಲಿ ಹೊರಡಿಸು ವರು, ಎಕ್ರೋನ್ ಕೀಳಲ್ಪಡುವದು.
2:5b.ZEP.002.005 ಸಮುದ್ರತೀರದ ನಿವಾಸಿಗಳಾದ ಕೆರೇತ್ಯರ ಜನಾಂಗಕ್ಕೆ ಅಯ್ಯೋ! ಕರ್ತನ ವಾಕ್ಯವು ನಿಮಗೆ ವಿರೋಧವಾಗಿದೆ; ಓ ಕಾನಾನೇ, ಫಿಲಿಷ್ಟಿಯರ ದೇಶವೇ, ನಿವಾಸಿಯೇ ಇಲ್ಲದ ಹಾಗೆ ನಿನ್ನನ್ನು ನಾಶಮಾಡುವೆನು.
2:6b.ZEP.002.006 ಸಮುದ್ರದ ತೀರವು ಕುರುಬರು ಮೇಯಿಸುವ ಸ್ಥಳಗಳಾಗಿಯೂ ಕುಂಟೆ ಗಳಾಗಿಯೂ ಕುರೀಹಟ್ಟಿಗಳಾಗಿಯೂ ಇರುವದು.
2:7b.ZEP.002.007 ತೀರವು ಯೆಹೂದದ ಮನೆತನದವರ ಉಳಿದವರಿಗೆ ಆಗುವದು; ಅದರ ಮೇಲೆ ಮೇಯಿಸುವರು; ಅಷ್ಕೆ ಲೋನಿನ ಮನೆತನಗಳಲ್ಲಿ ಸಾಯಂಕಾಲ ಅವರು ಮಲಗಿಕೊಳ್ಳುವರು; ಅವರ ದೇವರಾದ ಕರ್ತನು ಅವರನ್ನು ದರ್ಶಿಸಿ ಅವರ ಸೆರೆಯನ್ನು ತಿರುಗಿಸುವನು.
2:8b.ZEP.002.008 ನನ್ನ ಜನರನ್ನು ನಿಂದಿಸಿ, ಅವರ ಮೇರೆಗೆ ಮೋವಾ ಬ್ಯರೂ ಅಮ್ಮೋನ್ಯರೂ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಂಡದ್ದನ್ನು ನಾನು ಕೇಳಿದ್ದೇನೆ.
2:9b.ZEP.002.009 ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳು ವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಮೋವಾಬು ಸೊದೋಮಿನ ಹಾಗಾಗುವದು; ಅಮ್ಮೋ ನನ ಮಕ್ಕಳು ಗೊಮೋರದ ಹಾಗಾಗುವರು; ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಣಿಗಳುಳ್ಳಂಥ ನಿತ್ಯವಾಗಿ ಹಾಳಾಗುವಂಥ ಸ್ಥಳವಾಗುವರು; ನನ್ನ ಜನರಲ್ಲಿ ಉಳಿದವರು ಅವರನ್ನು ಸುಲುಕೊಳ್ಳುವರು; ನನ್ನ ಜನರಲ್ಲಿ ಮಿಕ್ಕಾದವರು ಅವರನ್ನು ಸ್ವಾಧೀನ ಮಾಡಿಕೊಳ್ಳುವರು.
2:10b.ZEP.002.010 ಅವರ ಗರ್ವಕ್ಕೋಸ್ಕರ ಇದೇ ಅವರಿಗೆ ಸಿಕ್ಕುವದು; ಅವರು ಸೈನ್ಯಗಳ ಕರ್ತನ ಜನರಿಗೆ ವಿರೋಧವಾಗಿ ನಿಂದಿಸಿ ತಮ್ಮನ್ನು ಹೆಚ್ಚಿಸಿಕೊಂಡ ದ್ದರಿಂದಲೇ
2:11b.ZEP.002.011 ಕರ್ತನು ಅವರಿಗೆ ಭಯಂಕರನಾಗಿ ರುವನು. ಆತನು ಭೂಮಿಯ ಎಲ್ಲಾ ದೇವರುಗಳನ್ನು ಕ್ಷೀಣಮಾಡುವನು; ಅನ್ಯಜನಾಂಗಗಳ ದ್ವೀಪಗಳವ ರೆಲ್ಲರು ತಮ್ಮ ತಮ್ಮ ಸ್ಥಳಗಳಿಂದ ಆತನನ್ನು ಆರಾ ಧಿಸುವರು.
2:12b.ZEP.002.012 ಕೂಷ್ಯರೇ, ನೀವೂ ಸಹ ನನ್ನ ಕತ್ತಿ ಯಿಂದ ಕೊಲ್ಲಲ್ಪಡುವಿರಿ;
2:13b.ZEP.002.013 ಆತನು ತನ್ನ ಕೈಯನ್ನು ಉತ್ತರದ ಮೇಲೆ ಚಾಚಿ ಅಶ್ಶೂರನ್ನು ನಾಶಮಾಡಿ ನಿನೆವೆಯನ್ನು ಹಾಳಾಗಿಯೂ ಅರಣ್ಯದಂತೆ ಒಣಗಿ ದ್ದಾಗಿಯೂ ಮಾಡುವನು.
2:14b.ZEP.002.014 ಅದರ ಮಧ್ಯದಲ್ಲಿ ಮಂದೆಗಳೂ ಜನಾಂಗಗಳ ಮೃಗಗಳೆಲ್ಲವೂ ಮಲಗುವವು; ಬಕಪಕ್ಷಿಯೂ ಮುಳ್ಳು ಹಂದಿಯೂ ಅದರ ಮೇಲಿನ ಅವುಗಳ ಹಾಸುಗಳಲ್ಲಿ ಇಳುಕೊಳ್ಳುವವು; ಕಿಟಕಿಗಳಲ್ಲಿ ಹಾಡುವ ಶಬ್ದವಿರುವದು; ಹೊಸ್ತಿಲಗಳಲ್ಲಿ ಹಾಳು ಇರುವದು; ದೇವದಾ ರಿನ ಕೆಲಸವನ್ನು ಬೈಲುಮಾಡುವನು.ನಿಶ್ಚಿಂತೆಯಾಗಿ ವಾಸಿಸಿದಂಥ ತಾನೇ ಹೊರತು ಮತ್ತೊಂದಿಲ್ಲವೆಂದು ತನ್ನೊಳಗೆ ಅಂದುಕೊಂಡಂಥ ಉಲ್ಲಾಸದ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದನ್ನು ಹಾದು ಹೋಗುವವರೆಲ್ಲರು ಸಿಳ್ಳಿಟ್ಟು ಕೈ ಅಲ್ಲಾಡಿಸುವರು.
2:15b.ZEP.002.015 ನಿಶ್ಚಿಂತೆಯಾಗಿ ವಾಸಿಸಿದಂಥ ತಾನೇ ಹೊರತು ಮತ್ತೊಂದಿಲ್ಲವೆಂದು ತನ್ನೊಳಗೆ ಅಂದುಕೊಂಡಂಥ ಉಲ್ಲಾಸದ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದನ್ನು ಹಾದು ಹೋಗುವವರೆಲ್ಲರು ಸಿಳ್ಳಿಟ್ಟು ಕೈ ಅಲ್ಲಾಡಿಸುವರು.
3
3:1b.ZEP.003.001 ಅಸಹ್ಯವಾದ, ಮೈಲಿಗೆಯಾದ, ಶ್ರಮೆಪಡಿಸುವ ಪಟ್ಟಣಕ್ಕೆ ಅಯ್ಯೋ!
3:2b.ZEP.003.002 ಅವಳು ಶಬ್ದಕ್ಕೆ ವಿಧೇಯಳಾಗಲಿಲ್ಲ, ಶಿಕ್ಷೆಗೆ ಒಳಪಡಲಿಲ್ಲ, ಕರ್ತನಲ್ಲಿ ಭರವಸವಿಡ ಲಿಲ್ಲ. ತನ್ನ ದೇವರ ಸವಿಾಪಕ್ಕೆ ಬರಲಿಲ್ಲ.
3:3b.ZEP.003.003 ಅದರ ಮಧ್ಯದಲ್ಲಿರುವ ಪ್ರಧಾನರುಗಳು ಗರ್ಜಿಸುವ ಸಿಂಹಗಳಾಗಿದ್ದಾರೆ; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳಾಗಿದ್ದಾರೆ; ಮರುದಿನದ ವರೆಗೂ ಕಡಿಯುವದಕ್ಕೆ ಎಲುಬುಗಳಿಲ್ಲ.
3:4b.ZEP.003.004 ಅದರ ಪ್ರವಾದಿಗಳು ಹಗುರವಾಗಿಯೂ ವಂಚಕರಾಗಿಯೂ ಇದ್ದಾರೆ; ಅದರ ಯಾಜಕರು ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಿ ದ್ದಾರೆ; ನ್ಯಾಯಪ್ರಮಾಣಕ್ಕೆ ಬಲಾತ್ಕಾರಮಾಡಿದ್ದಾರೆ.
3:5b.ZEP.003.005 ನೀತಿ ಯುಳ್ಳ ಕರ್ತನು ಅದರ ಮಧ್ಯದಲ್ಲಿ ಇದ್ದಾನೆ, ಆತನು ಅನ್ಯಾಯಮಾಡುವದಿಲ್ಲ; ಪ್ರತಿ ಬೆಳಿಗ್ಗೆ ತನ್ನ ನ್ಯಾಯ ತೀರ್ಪನ್ನು ಬೆಳಕಿಗೆ ತರುತ್ತಾನೆ; ಆತನು ತಪ್ಪುವಾತನಲ್ಲ, ಆದರೆ ಅನ್ಯಾಯವಂತನು ನಾಚಿಕೆ ಯನ್ನು ಅರಿಯನು.
3:6b.ZEP.003.006 ನಾನು ಜನಾಂಗಗಳನ್ನು ಕಡಿದು ಬಿಟ್ಟಿದ್ದೇನೆ; ಅವುಗಳ ಗೋಪುರಗಳು ಹಾಳಾಗಿವೆ; ಅವರ ಬೀದಿಗಳನ್ನು ಯಾರೂ ಹಾದು ಹೋಗದ ಹಾಗೆ ಹಾಳು ಮಾಡಿದ್ದೇನೆ; ಅವುಗಳ ಪಟ್ಟಣಗಳು ನಾಶವಾದವು, ಹೀಗೆ ಅಲ್ಲಿ ಯಾವನೂ ಇರುವದಿಲ್ಲ, ಯಾವ ಮನುಷ್ಯನು ಅಲ್ಲಿ ವಾಸಿಸುವದೂ ಇಲ್ಲ.
3:7b.ZEP.003.007 ನಾನು--ನಿಶ್ಚಯವಾಗಿ ನೀನು ನನಗೆ ಭಯಪಟ್ಟು ಶಿಕ್ಷಣವನ್ನು ಹೊಂದುವಿ; ಹೀಗೆ ನಾನು ಅವರಿಗೆ ಶಿಕ್ಷೆ ವಿಧಿಸಿದರೂ ಅವರ ನಿವಾಸವು ಕಡಿದು ಬಿಡಲ್ಪ ಡುವದಿಲ್ಲ; ಆದರೆ ಅವರು ಬೇಗನೆ ಎದ್ದು ತಮ್ಮ ಕ್ರಿಯೆಗಳನ್ನೆಲ್ಲಾ ಕೆಡಿಸಿಬಿಟ್ಟರು ಅಂದೆನು.
3:8b.ZEP.003.008 ಆದದರಿಂದ ನಾನು ಕೊಳ್ಳೆಗೆ ಏಳುವ ದಿನದ ವರೆಗೂ ನನಗೆ ಕಾದುಕೊಳ್ಳಿರಿ; ಜನಾಂಗಗಳನ್ನು ಕೂಡಿಸುವದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವದಕ್ಕೂ ತೀರ್ಮಾನಿಸಿಕೊಂಡಿದ್ದೇನೆ; ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸ ಲ್ಪಡುವದು.
3:9b.ZEP.003.009 ಆಗ ನಾನು ಶುದ್ಧ ಭಾಷೆಯನ್ನು ಜನಾಂಗಗಳಿಗೆ ತಿರುಗಿ ಕೊಡುವೆನು; ಅವರೆಲ್ಲರು ಕರ್ತನ ಹೆಸರಿನಲ್ಲಿ ಮೊರೆಯಿಟ್ಟು ಏಕ ಮನಸ್ಸಿನಿಂದ ಆತನಿಗೆ ಸೇವೆ ಮಾಡು ವರು.
3:10b.ZEP.003.010 ಕೂಷಿನ ನದಿಗಳ ಆಚೆಯಿಂದ ನನ್ನ ಭಕ್ತರೂ ಚದರಿ ಹೋದವರ ನನ್ನ ಮಗಳೂ ನನ್ನ ಕಾಣಿಕೆಯನ್ನು ತರುವರು.
3:11b.ZEP.003.011 ಆ ದಿನದಲ್ಲಿ ನೀನು ನನಗೆ ವಿರೋಧ ವಾಗಿ ಪಾಪ ಮಾಡಿದ ನಿನ್ನ ಎಲ್ಲಾ ಕ್ರಿಯೆಗಳ ನಿಮಿತ್ತ ನಾಚಿಕೆಪಡದೆ ಇರುವಿ; ಆಗ ನಿನ್ನ ಹೆಚ್ಚಳದಲ್ಲಿ ಸಂಭ್ರಮ ಪಡುವವರನ್ನು ನಿನ್ನ ಮಧ್ಯದೊಳಗಿಂದ ತೆಗೆದುಹಾಕು ವೆನು; ನನ್ನ ಪರಿಶುದ್ಧ ಪರ್ವತಕ್ಕೋಸ್ಕರ ಇನ್ನು ಮೇಲೆ ನೀನು ಗರ್ವಪಡುವದೇ ಇಲ್ಲ.
3:12b.ZEP.003.012 ಇದಲ್ಲದೆ ನಿನ್ನ ಮಧ್ಯದಲ್ಲಿ ಬಡವರನ್ನೂ ಹೀನವಾದವರನ್ನೂ ಉಳಿಸುವೆನು; ಇವರು ಕರ್ತನ ಹೆಸರಿನಲ್ಲಿ ನಂಬಿಕೆ ಇಡುವರು.
3:13b.ZEP.003.013 ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯಮಾಡುವದಿಲ್ಲ; ಸುಳ್ಳು ಹೇಳುವದಿಲ್ಲ; ಅವರ ಬಾಯಲ್ಲಿ ಮೋಸದ ನಾಲಿಗೆ ಕಾಣುವದಿಲ್ಲ; ಅವರು ಮಂದೆಯಂತೆ ಮೇದು ಮಲಗುವರು; ಭಯಪಡಿಸು ವವನು ಒಬ್ಬನೂ ಇರುವದಿಲ್ಲ.
3:14b.ZEP.003.014 ಓ ಚೀಯೋನಿನ ಕುಮಾರ್ತೆಯೇ, ಹಾಡು; ಇಸ್ರಾಯೇಲೇ ಆರ್ಭಟಿಸು; ಯೆರೂಸಲೇಮಿನ ಕುಮಾರ್ತೆಯೇ, ಪೂರ್ಣಹೃದಯ ದಿಂದ ಸಂಭ್ರಮಿಸಿ ಉಲ್ಲಾಸಪಡು.
3:15b.ZEP.003.015 ಕರ್ತನು ನಿನ್ನ ನ್ಯಾಯ ತೀರ್ವಿಕೆಗಳನ್ನು ದೂರಮಾಡಿ ನಿನ್ನ ಶತ್ರು ವನ್ನು ತೆಗೆದುಹಾಕಿದ್ದಾನೆ; ಇಸ್ರಾಯೇಲಿನ ಅರಸನಾದ ಕರ್ತನು ನಿನ್ನ ಮಧ್ಯದಲ್ಲಿ ಇದ್ದಾನೆ; ಇನ್ನು ಮೇಲೆ ನೀನು ಕೇಡನ್ನು ನೋಡುವದಿಲ್ಲ.
3:16b.ZEP.003.016 ಆ ದಿನದಲ್ಲಿ ಯೆರೂಸಲೇಮಿಗೆ ಹೇಳಲ್ಪಡುವದೇನಂದರೆ--ನೀನು ಭಯಪಡಬೇಡ; ಚೀಯೋನೇ, ನಿನ್ನ ಕೈಗಳು ಬಲ ಹೀನವಾಗದಿರಲಿ.
3:17b.ZEP.003.017 ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ಪರಾಕ್ರಮಿಯಾಗಿದ್ದಾನೆ. ಆತನು ರಕ್ಷಿಸು ವಂಥ ವನು; ಆನಂದದಿಂದ ನಿನ್ನಲ್ಲಿ ಸಂತೋಷಿಸು ವನು; ತನ್ನ ಪ್ರೀತಿಯಲ್ಲಿ ಮೌನವಾಗಿರುವನು; ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವನು.
3:18b.ZEP.003.018 ಪರಿಶುದ್ಧ ಸಭೆಯ ವಿಷಯವಾಗಿ ವ್ಯಸನ ಪಡುವವರನ್ನು ನಾನು ಕೂಡಿಸುತ್ತೇನೆ; ಅವರು ನಿನ್ನವರೇ; ಅವರ ಮೇಲೆ ನಿಂದೆ ಭಾರವಾಗಿದೆ.
3:19b.ZEP.003.019 ಇಗೋ, ಆ ಕಾಲದಲ್ಲಿ ನಿನ್ನನ್ನು ಶ್ರಮೆ ಪಡಿಸುವವರನ್ನೆಲ್ಲಾ ತೀರಿಸಿಬಿಟ್ಟು, ಕುಂಟಾದ ದ್ದನ್ನು ರಕ್ಷಿಸಿ, ಹೊರಡಿಸಲ್ಪಟ್ಟವರನ್ನು ಕೂಡಿಸಿ, ಅವರಿಗೆ ನಾಚಿಕೆಯಾದ ದೇಶಗಳಲ್ಲೆಲ್ಲಾ ಹೊಗಳಿಕೆಯನ್ನೂ ಕೀರ್ತಿಯನ್ನೂ ಉಂಟುಮಾಡುವೆನು.ಆ ಕಾಲದಲ್ಲಿ ಅಂದರೆ ನಾನು ನಿಮ್ಮನ್ನು ಕೂಡಿಸುವ ಕಾಲದಲ್ಲಿ ನಿಮ್ಮನ್ನು ಕರಕೊಂಡು ಬರುವೆನು; ನಾನು ನಿಮ್ಮ ಸೆರೆಯನ್ನು ನಿಮ್ಮ ಕಣ್ಣುಗಳ ಮುಂದೆ ತಿರುಗಿಸುವಾಗ ಭೂಮಿಯ ಎಲ್ಲಾ ಜನರಲ್ಲಿ ನಿಮಗೆ ಕೀರ್ತಿಯನ್ನೂ ಹೊಗಳಿಕೆ ಯನ್ನೂ ಉಂಟುಮಾಡುವೆನು ಎಂದು ಕರ್ತನು ಹೇಳುತ್ತಾನೆ.
3:20b.ZEP.003.020 ಆ ಕಾಲದಲ್ಲಿ ಅಂದರೆ ನಾನು ನಿಮ್ಮನ್ನು ಕೂಡಿಸುವ ಕಾಲದಲ್ಲಿ ನಿಮ್ಮನ್ನು ಕರಕೊಂಡು ಬರುವೆನು; ನಾನು ನಿಮ್ಮ ಸೆರೆಯನ್ನು ನಿಮ್ಮ ಕಣ್ಣುಗಳ ಮುಂದೆ ತಿರುಗಿಸುವಾಗ ಭೂಮಿಯ ಎಲ್ಲಾ ಜನರಲ್ಲಿ ನಿಮಗೆ ಕೀರ್ತಿಯನ್ನೂ ಹೊಗಳಿಕೆ ಯನ್ನೂ ಉಂಟುಮಾಡುವೆನು ಎಂದು ಕರ್ತನು ಹೇಳುತ್ತಾನೆ.
- Holder of rights
- Multilingual Bible Corpus
- Citation Suggestion for this Object
- TextGrid Repository (2025). Kannada Collection. Zephaniah (Kannada). Zephaniah (Kannada). Multilingual Parallel Bible Corpus. Multilingual Bible Corpus. https://hdl.handle.net/21.11113/0000-0016-A1DA-C