Haggai (Kannada)
1
1:1b.HAG.001.001 ಅರಸನಾದ ದಾರ್ಯಾವೆಷನ ಎರಡನೇ ವರುಷದ, ಆರನೇ ತಿಂಗಳಿನ ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನ ಕೈಯಿಂದ ಯೆಹೂದದ ಅಧಿಪತಿಯಾದ ಶೆಯಲ್ತಿ ಯೇಲನ ಮಗನಾದ ಜೆರುಬ್ಬಾಬೆಲನಿಗೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನಿಗೂ ಉಂಟಾಯಿತು.
1:2b.HAG.001.002 ಸೈನ್ಯಗಳ ಕರ್ತನು ಮಾತನಾಡಿ ಹೀಗೆ ಹೇಳುತ್ತಾನೆ, ಏನಂದರೆ--ಕಾಲವು ಅಂದರೆ ಕರ್ತನ ಆಲಯವನ್ನು ಕಟ್ಟುವ ಕಾಲವು ಬರಲಿಲ್ಲ ಎಂದು ಈ ಜನರು ಅನ್ನು ತ್ತಾರೆ.
1:3b.HAG.001.003 ಆಗ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮೂಲಕ ಉಂಟಾಯಿತು. ಏನಂದರೆ--
1:4b.HAG.001.004 ಈ ಮನೆ ಹಾಳಾಗಿರಲಾಗಿ ನೀವು ನಿಮ್ಮ ಚಿತ್ರ ಹಲಗೆಗಳುಳ್ಳ ಮನೆಗಳಲ್ಲಿ ವಾಸಮಾಡುವದಕ್ಕೆ ಇದು ನಿಮಗೆ ಸಮಯವೋ?
1:5b.HAG.001.005 ಆದದರಿಂದ ಈಗ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಮಾರ್ಗಗಳನ್ನು ಯೋಚಿಸಿಕೊಳ್ಳಿರಿ.
1:6b.HAG.001.006 ನೀವು ಬಹಳವಾಗಿ ಬಿತ್ತಿದ್ದೀರಿ, ಆದರೆ ಕೊಂಚವಾಗಿ ತಂದಿದ್ದೀರಿ; ನೀವು ತಿನ್ನುತ್ತೀರಿ, ಆದರೆ ಸಾಕಾಗಲಿಲ್ಲ; ಕುಡಿಯುತ್ತೀರಿ, ಆದರೆ ತೃಪ್ತಿ ಯಾಗಲಿಲ್ಲ; ಧರಿಸುತ್ತೀರಿ, ಆದರೆ ಬೆಚ್ಚಗಾಗಲಿಲ್ಲ; ಸಂಬಳವನ್ನು ಸಂಪಾದಿಸುವವನು ಅದನ್ನು ತೂತು ಗಳುಳ್ಳ ಚೀಲದಲ್ಲಿ ಹಾಕುವದಕ್ಕೆ ಸಂಪಾದಿಸುತ್ತಾನೆ.
1:7b.HAG.001.007 ಸೈನ್ಯಗಳ ಕರ್ತನು ಹೇಳುವದೇನಂದರೆ -- ನಿಮ್ಮ ಮಾರ್ಗಗಳನ್ನು ಯೋಚಿಸಿಕೊಳ್ಳಿರಿ.
1:8b.HAG.001.008 ಬೆಟ್ಟಕ್ಕೆ ಹೋಗಿ ಮರವನ್ನು ತಂದು ಮನೆಯನ್ನು ಕಟ್ಟಿರಿ; ಆಗ ನಾನು ಅದಕ್ಕೆ ಮೆಚ್ಚಿ ಮಹಿಮೆಯನ್ನು ಹೊಂದುವೆನೆಂದು ಕರ್ತನು ಹೇಳುತ್ತಾನೆ.
1:9b.HAG.001.009 ಬಹಳ ಆಗಬೇಕೆಂದು ನಿರೀಕ್ಷಿ ಸಿದಿರಿ. ಆದರೆ ಇಗೋ, ಕೊಂಚವೇ ಆಯಿತು; ನೀವು ಅದನ್ನು ಮನೆಗೆ ತಂದಾಗ ನಾನು ಅದರ ಮೇಲೆ ಊದಿಬಿಟ್ಟೆನು. ಯಾತಕ್ಕೆ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ. ನನ್ನ ಆಲಯವು ಹಾಳಾಗಿ ರುವದರಿಂದ ನೀವು ನಿಮ್ಮ ನಿಮ್ಮ ಸ್ವಂತ ಮನೆಗಳಿಗೆ ಓಡಿ ಹೋಗುತ್ತೀರಲ್ಲಾ?
1:10b.HAG.001.010 ಆದದರಿಂದ ನಿಮ್ಮ ನಿಮಿತ್ತವೇ ಆಕಾಶವು ಮಂಜನ್ನು ತಡೆಯುತ್ತದೆ; ಭೂಮಿಯು ತನ್ನ ಹುಟ್ಟುವಳಿಯನ್ನು ತಡೆದುಬಿಟ್ಟಿದೆ.
1:11b.HAG.001.011 ಇದಲ್ಲದೆ ನಾನು ಭೂಮಿಯ ಮೇಲೆಯೂ ಬೆಟ್ಟಗಳ ಮೇಲೆಯೂ ಧಾನ್ಯದ ಮೇಲೆಯೂ ಹೊಸ ದ್ರಾಕ್ಷಾರಸದ ಮೇಲೆ ಯೂ ಎಣ್ಣೆಯ ಮೇಲೆಯೂ ಭೂಮಿ ಹುಟ್ಟುವಳಿಯ ಮೇಲೆಯೂ ಮನುಷ್ಯರ ಮೇಲೆಯೂ ದನಗಳ ಮೇಲೆಯೂ ಕೈ ಕಷ್ಟಗಳೆಲ್ಲಾದರ ಮೇಲೆಯೂ ಕ್ಷಾಮ ವನ್ನು ಕರೆದೆನು.
1:12b.HAG.001.012 ಆಗ ಶೆಯಲ್ತೀಯೇಲನ ಮಗನಾದ ಜೆರುಬ್ಬಾ ಬೆಲನೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನೂ ಜನರಲ್ಲಿ ಉಳಿದವರೆ ಲ್ಲರೂ ತಮ್ಮ ದೇವರಾದ ಕರ್ತನ ಶಬ್ದವನ್ನೂ ತಮ್ಮ ದೇವರಾದ ಕರ್ತನು ಕಳುಹಿಸಿದ ಪ್ರವಾದಿಯಾದ ಹಗ್ಗಾಯನ ಮಾತುಗಳನ್ನೂ ಕೇಳಿದರು; ಜನರು ಕರ್ತ ನಿಗೆ ಭಯಪಟ್ಟರು.
1:13b.HAG.001.013 ಆಗ ಕರ್ತನ ಸೇವಕನಾದ ಹಗ್ಗಾಯನು ಕರ್ತನ ಮಾತನ್ನು ಜನರಿಗೆ ತಂದು--ನಾನು ನಿಮ್ಮ ಸಂಗಡ ಇದ್ದೇನೆಂದು ಕರ್ತನು ಹೇಳು ತ್ತಾನೆ.
1:14b.HAG.001.014 ಕರ್ತನು ಯೆಹೂದದ ಅಧಿಪತಿಯಾದ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನ ಆತ್ಮ ವನ್ನೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನ ಆತ್ಮವನ್ನೂ ಜನರಲ್ಲಿ ಉಳಿದವರೆಲ್ಲರ ಆತ್ಮವನ್ನೂ ಉದ್ರೇಕಿಸಿದ್ದರಿಂದ ಅವರು ಬಂದು ಅರಸನಾದ ದಾರ್ಯಾವೆಷನ ಎರಡನೆಯ ವರುಷದ ಆರನೆಯ ತಿಂಗಳಿನ ಇಪ್ಪತ್ತು ನಾಲ್ಕನೆಯ ದಿನದಲ್ಲಿತಮ್ಮ ದೇವರಾದ ಸೈನ್ಯಗಳ ಕರ್ತನ ಆಲಯದಲ್ಲಿ ಬಂದು ಕೆಲಸ ಮಾಡಿದರು.
1:15b.HAG.001.015 ತಮ್ಮ ದೇವರಾದ ಸೈನ್ಯಗಳ ಕರ್ತನ ಆಲಯದಲ್ಲಿ ಬಂದು ಕೆಲಸ ಮಾಡಿದರು.
2
2:1b.HAG.002.001 ಏಳನೆಯ ತಿಂಗಳಿನಲ್ಲಿ, ತಿಂಗಳಿನ ಇಪ್ಪ ತ್ತೊಂದನೆಯ ದಿನದಲ್ಲಿ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮೂಲಕ ಉಂಟಾಯಿತು; ಏನಂದರೆ--
2:2b.HAG.002.002 ಯೆಹೂದದ ಅಧಿಪತಿಯಾದ ಶೆಯಲ್ತೀ ಯೇಲನ ಮಗನಾದ ಜೆರುಬ್ಬಾಬೆಲನಿಗೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನಿಗೂ ಜನರಲ್ಲಿ ಉಳಿದವರಿಗೂ ನೀನು ಹೇಳತಕ್ಕದ್ದೇನಂದರೆ--
2:3b.HAG.002.003 ಈ ಆಲಯವನ್ನು ಅದರ ಪೂರ್ವದ ಮಹಿಮೆಯಲ್ಲಿ ನೋಡಿದವರೊಳಗೆ ಉಳಿದ ವರು ನಿಮ್ಮಲ್ಲಿ ಯಾರು? ಈಗ ಅದನ್ನು ಹೇಗೆ ನೋಡು ತ್ತೀರಿ? ಇದು ನಿಮ್ಮ ಕಣ್ಣುಗಳಿಗೆ ಅದರ ಹೋಲಿಕೆಯು ಏನೂ ಇಲ್ಲದ ಹಾಗೆ ತೋರು ತ್ತದಲ್ಲವೋ?
2:4b.HAG.002.004 ಆದಾಗ್ಯೂ ಈಗ ಕರ್ತನು ಹೇಳುತ್ತಾನೆ --ಜೆರುಬ್ಬಾಬೆಲನೇ, ಬಲವಾಗಿರು; ಪ್ರಧಾನ ಯಾಜಕ ನಾದ ಯೆಹೋಚಾದಾಕನ ಮಗನಾದ ಯೆಹೋ ಶುವನೇ, ಬಲವಾಗಿರು; ದೇಶದ ಜನರೆಲ್ಲರೇ, ಬಲ ವಾಗಿರ್ರಿ ಎಂದು ಕರ್ತನು ಹೇಳುತ್ತಾನೆ; ಕೆಲಸ ಮಾಡಿರಿ; ನಾನು ನಿಮ್ಮ ಸಂಗಡ ಇದ್ದೇನೆಂದು ಸೈನ್ಯ ಗಳ ಕರ್ತನು ಹೇಳುತ್ತಾನೆ.
2:5b.HAG.002.005 ನೀವು ಐಗುಪ್ತದೊಳ ಗಿಂದ ಹೊರಗೆ ಬಂದಾಗ ನಾನು ನಿಮ್ಮ ಸಂಗಡ ಒಡಂಬಡಿಕೆ ಮಾಡಿದ ವಾಕ್ಯದ ಪ್ರಕಾರ ನನ್ನ ಆತ್ಮವು ನಿಮ್ಮ ಮಧ್ಯದಲ್ಲಿ ನಿಲ್ಲುತ್ತದೆ; ನೀವು ಭಯಪಡ ಬೇಡಿರಿ.
2:6b.HAG.002.006 ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ, ಇನ್ನು ಒಂದು ಸಾರಿ ಕೊಂಚ ಕಾಲವಾದ ಮೇಲೆ ನಾನು ಆಕಾಶಗಳನ್ನೂ ಭೂಮಿಯನ್ನೂ ಸಮುದ್ರ ವನ್ನೂ ಒಣಗಿದ ನೆಲವನ್ನೂ ಕದಲಿಸುತ್ತೇನೆ.
2:7b.HAG.002.007 ಎಲ್ಲಾ ಜನಾಂಗಗಳನ್ನು ಅದುರಿಸುತ್ತೇನೆ; ಎಲ್ಲಾ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು ಈ ಆಲಯವನ್ನು ಮಹಿಮೆಯಿಂದ ತುಂಬಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
2:8b.HAG.002.008 ಬೆಳ್ಳಿಯು ನನ್ನದು, ಚಿನ್ನವು ನನ್ನದು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
2:9b.HAG.002.009 ಈ ಆಲಯದ ಮುಂದಿನ ಮಹಿಮೆಯು ಹಿಂದಿನ ಮಹಿಮೆಗಿಂತ ವಿಶೇಷವಾಗಿರುವದು ಎಂದು ಸೈನ್ಯಗಳ ಕರ್ತನು ಹೇಳು ತ್ತಾನೆ; ಈ ಸ್ಥಳದಲ್ಲಿ ಸಮಾಧಾನ ಕೊಡುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
2:10b.HAG.002.010 ದಾರ್ಯಾವೆಷನ ಎರಡನೇ ವರುಷದಲ್ಲಿ ಒಂಭ ತ್ತನೇ ತಿಂಗಳಿನ, ಇಪ್ಪತ್ತನಾಲ್ಕನೆ ದಿನದಲ್ಲಿ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನಿಂದ ಉಂಟಾಗಿ ಹೇಳಿದ್ದೇನಂದರೆ,
2:11b.HAG.002.011 ಸೈನ್ಯಗಳ ಕರ್ತನು ಹೇಳುವದೇ ನಂದರೆ--ನ್ಯಾಯಪ್ರಮಾಣದ ವಿಷಯವಾಗಿ ಯಾಜಕ ರಿಗೆ--
2:12b.HAG.002.012 ಒಬ್ಬನು ತನ್ನ ವಸ್ತ್ರದ ಸೆರಗಿನಲ್ಲಿ ಪರಿಶುದ್ಧ ಮಾಂಸವನ್ನು ಹೊತ್ತು, ತನ್ನ ಸೆರಗಿನಿಂದ ರೊಟ್ಟಿಯ ನ್ನಾದರೂ ಬೇಯಿಸಿದ್ದನ್ನಾದರೂ ದ್ರಾಕ್ಷಾರಸವನ್ನಾ ದರೂ ಎಣ್ಣೆಯನ್ನಾದರೂ ಯಾವ ವಿಧದ ಆಹಾರವ ನ್ನಾದರೂ ಮುಟ್ಟಿದರೆ ಅದು ಪರಿಶುದ್ಧವಾಗುವದೋ ಕೇಳು ಅಂದನು. ಯಾಜಕರು--ಇಲ್ಲವೆಂದು ಉತ್ತರ ಕೊಟ್ಟರು.
2:13b.HAG.002.013 ಆಗ ಹಗ್ಗಾಯನು--ಆದರೆ ಹೆಣದಿಂದ ಅಶುದ್ಧನಾದವನು, ಇವುಗಳಲ್ಲಿ ಯಾವದನ್ನಾದರೂ ಮುಟ್ಟಿದರೆ, ಅಶುದ್ಧವಾಗುವದೋ ಅಂದನು. ಯಾಜ ಕರು ಉತ್ತರ ಕೊಟ್ಟು--ಅಶುದ್ದವಾಗುವದು ಅಂದರು.
2:14b.HAG.002.014 ಆಗ ಹಗ್ಗಾಯನು ಉತ್ತರಕೊಟ್ಟು ಹೇಳಿದ್ದೇನಂದರೆ --ಈ ಜನರೂ ಈ ಜನಾಂಗವೂ ನನ್ನ ಮುಂದೆ ಹೀಗೆಯೇ ಇದ್ದಾರೆ ಎಂದು ಕರ್ತನು ಅನ್ನುತ್ತಾನೆ; ಅವರ ಕೈಕೆಲಸಗಳೆಲ್ಲಾ ಹೀಗೆಯೇ; ಅವರು ಅರ್ಪಿಸು ವಂಥದ್ದು ಅಶುದ್ಧವೇ.
2:15b.HAG.002.015 ಈಗ ಚೆನ್ನಾಗಿ ಯೋಚಿಸಿ ಕೊಳ್ಳಿರಿ; ಇಂದಿನಿಂದ ಇದಕ್ಕೆ ಮುಂಚೆ ಕರ್ತನ ಆಲಯದಲ್ಲಿ ಕಲ್ಲಿನ ಮೇಲೆ ಕಲ್ಲು ಇಡಲ್ಪಡುವದಕ್ಕಿಂತ ಕ್ಷಿುುಂಚೆ
2:16b.HAG.002.016 ಆ ದಿವಸಗಳು ಇದ್ದದ್ದು ಮೊದಲುಗೊಂಡು ಒಬ್ಬನು ಇಪ್ಪತ್ತು ಸೇರಿನ ರಾಶಿಗೆ ಬಂದಾಗ ಹತ್ತು ಸೇರು ಮಾತ್ರವಾಗಿತ್ತು; ಒಬ್ಬನು ಐವತ್ತು ಪಾತ್ರೆಗಳನ್ನು ತುಂಬಿ ಸುವದಕ್ಕೆ ತೊಟ್ಟಿಗೆ ಬಂದಾಗ ಇಪ್ಪತ್ತು ಮಾತ್ರ ದೊರೆ ಯುತ್ತಿತ್ತಷ್ಟೆ.
2:17b.HAG.002.017 ನಾನು ನಿಮ್ಮನ್ನು ಸಸ್ಯ ನಾಶದಿಂದಲೂ ಬಿರುಗಾಳಿಯಿಂದಲೂ ಕಲ್ಮಳೆಯಿಂದಲೂ ನಿಮ್ಮ ಕೈ ದುಡಿತಗಳನ್ನೆಲ್ಲಾ ಹೊಡೆದೆನು; ಅದರೂ ನೀವು ನನ್ನ ಕಡೆಗೆ ತಿರುಗಲಿಲ್ಲವೆಂದು ಕರ್ತನು ಅನ್ನುತ್ತಾನೆ.
2:18b.HAG.002.018 ಚೆನ್ನಾಗಿ ಯೋಚಿಸಿಕೊಳ್ಳಿರಿ; ಇಂದಿನಿಂದ ಇದಕ್ಕೆ ಮುಂಚೆ ಒಂಭತ್ತನೇ ತಿಂಗಳಿನ ಇಪ್ಪತ್ತ ನಾಲ್ಕನೆಯ ದಿನದಲ್ಲಿ ಕರ್ತನ ಮಂದಿರದ ಅಸ್ತಿವಾರವು ಹಾಕಲ್ಪ ಟ್ಟಂದಿನಿಂದ ಯೋಚಿಸಿ ಕೊಳ್ಳಿರಿ.
2:19b.HAG.002.019 ಬೀಜವು ಇನ್ನು ಕಣಜದಲ್ಲಿ ಉಂಟೋ? ಮತ್ತು ದ್ರಾಕ್ಷೆ, ಅಂಜೂರ, ದಾಳಿಂಬರ, ಎಣ್ಣೆ ಮರಗಳು ಇನ್ನು ಫಲಿಸಲಿಲ್ಲ ವಲ್ಲಾ. ಈ ದಿನವು ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.
2:20b.HAG.002.020 ಎರಡನೇ ಸಾರಿ ಕರ್ತನ ವಾಕ್ಯವು ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಹಗ್ಗಾಯನಿಗೆ ಉಂಟಾ ಯಿತು.
2:21b.HAG.002.021 ಹೇಗಂದರೆ, ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನಿಗೆ ನೀನು ಹೇಳತಕ್ಕದ್ದೇನಂದರೆ--ನಾನು ಆಕಾಶಗಳನ್ನೂ ಭೂಮಿಯನ್ನೂ ಕದಲಿಸುವೆನು.
2:22b.HAG.002.022 ರಾಜ್ಯಗಳ ಸಿಂಹಾಸನವನ್ನು ಕೆಡವಿಹಾಕುವೆನು; ಅನ್ಯ ಜನಾಂಗಗಳ ರಾಜ್ಯಗಳ ಬಲವನ್ನು ನಾಶಮಾಡುವೆನು, ರಥಗಳನ್ನೂ ಅವುಗಳಲ್ಲಿ ಸವಾರಿ ಮಾಡುವವರನ್ನೂ ಕೆಡವಿಹಾಕುವೆನು; ಕುದುರೆಗಳೂ ಅದರ ಸವಾರರೂ ಪ್ರತಿಯೊಬ್ಬನೂ ತನ್ನ ಸಹೋದರನ ಕತ್ತಿಯಿಂದ ಬೀಳು ವನು.ಸೈನ್ಯಗಳ ಕರ್ತನು ಅನ್ನುತ್ತಾನೆ--ಆ ದಿನದಲ್ಲಿ ಶೆಯಲ್ತೀಯೇಲನ ಮಗನಾದ ನನ್ನ ಸೇವಕನಾದ ಜೆರು ಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದು ಕೊಂಡು ಮುದ್ರೆಯ ಹಾಗೆ ಇಡುವೆನು; ನಿನ್ನನ್ನು ನಾನೇ ಆದುಕೊಂಡಿದ್ದೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
2:23b.HAG.002.023 ಸೈನ್ಯಗಳ ಕರ್ತನು ಅನ್ನುತ್ತಾನೆ--ಆ ದಿನದಲ್ಲಿ ಶೆಯಲ್ತೀಯೇಲನ ಮಗನಾದ ನನ್ನ ಸೇವಕನಾದ ಜೆರು ಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದು ಕೊಂಡು ಮುದ್ರೆಯ ಹಾಗೆ ಇಡುವೆನು; ನಿನ್ನನ್ನು ನಾನೇ ಆದುಕೊಂಡಿದ್ದೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
- Holder of rights
- Multilingual Bible Corpus
- Citation Suggestion for this Object
- TextGrid Repository (2025). Kannada Collection. Haggai (Kannada). Haggai (Kannada). Multilingual Parallel Bible Corpus. Multilingual Bible Corpus. https://hdl.handle.net/21.11113/0000-0016-A1DD-9