Zechariah (Kannada)
1
1:1b.ZEC.001.001 ದಾರ್ಯಾವೆಷನ ಎರಡನೆಯ ವರುಷದ ಎಂಟನೆಯ ತಿಂಗಳಲ್ಲಿ ಕರ್ತನ ವಾಕ್ಯವು ಇದ್ದೋನನ ಮಗನಾದ ಬೆರಕ್ಯನ ಮಗನಾದ ಜೆಕರ್ಯ ನೆಂಬ ಪ್ರವಾದಿಗೆ ಉಂಟಾಯಿತು. ಹೇಗಂದರೆ--
1:2b.ZEC.001.002 ಕರ್ತನು ನಿಮ್ಮ ಪಿತೃಗಳ ಮೇಲೆ ಬಹು ಕೋಪಗೊಂಡಿ ದ್ದಾನೆ.
1:3b.ZEC.001.003 ಆದದರಿಂದ ನೀನು ಅವರಿಗೆ ಹೇಳತಕ್ಕದ್ದೇ ನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಕಡೆಗೆ ತಿರುಗಿ ಕೊಳ್ಳಿರಿ, ಆಗ ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
1:4b.ZEC.001.004 ನೀವು ನಿಮ್ಮ ಪಿತೃಗಳ ಹಾಗಿರಬೇಡಿರಿ; ಅವರಿಗೆ ಪೂರ್ವದ ಪ್ರವಾದಿಗಳು ಕೂಗಿ--ನಿಮ್ಮ ಕೆಟ್ಟ ಮಾರ್ಗಗಳನ್ನೂ ನಿಮ್ಮ ಕೆಟ್ಟ ಕ್ರಿಯೆಗಳನ್ನೂ ಬಿಟ್ಟು ತಿರುಗಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆಂದು ಹೇಳಿದರು; ಆದರೆ ಅವರು ಕೇಳಲಿಲ್ಲ; ನನ್ನಲ್ಲಿ ಲಕ್ಷ್ಯ ವಿಡಲಿಲ್ಲವೆಂದು ಕರ್ತನು ಅನ್ನುತ್ತಾನೆ.
1:5b.ZEC.001.005 ನಿಮ್ಮ ಪಿತೃ ಗಳೋ, ಅವರು ಎಲ್ಲಿ? ಪ್ರವಾದಿಗಳು, ಅವರು ನಿತ್ಯವಾಗಿ ಬದುಕುತ್ತಾರೋ?
1:6b.ZEC.001.006 ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯ ಗಳೂ ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿ ಲ್ಲವೋ? ಆಗ ಅವರು ತಿರುಗಿಕೊಂಡು--ಸೈನ್ಯಗಳ ಕರ್ತನು ಯೋಚಿಸಿದ ಹಾಗೆಯೇ ನಮ್ಮ ಮಾರ್ಗಗಳ ಪ್ರಕಾರವಾಗಿಯೂ ನಮ್ಮ ಕ್ರಿಯೆಗಳ ಪ್ರಕಾರವಾ ಗಿಯೂ ನಮಗೆ ಮಾಡಿದ್ದಾನೆಂದು ಹೇಳಿದರು ಎಂಬದು.
1:7b.ZEC.001.007 ದಾರ್ಯಾವೆಷನ ಎರಡನೆಯ ವರುಷದ ಹನ್ನೊಂ ದನೆ ತಿಂಗಳಾದ ಶೆಬಾಟ್ ಎಂಬ ತಿಂಗಳಿನ ಇಪ್ಪತ್ತ ನಾಲ್ಕನೆಯ ದಿನದಲ್ಲಿ ಕರ್ತನ ವಾಕ್ಯವು ಇದ್ದೋನಿನ ಮಗನಾದ ಬೆರೆಕ್ಯನ ಮಗನಾದ ಪ್ರವಾದಿಯಾದ ಜೆಕರ್ಯನಿಗೆ ಉಂಟಾಯಿತು. ಹೇಗೆಂದರೆ,
1:8b.ZEC.001.008 ನಾನು ರಾತ್ರಿಯಲ್ಲಿ ನೋಡಿದಾಗ ಇಗೋ, ಕೆಂಪು ಕುದುರೆಯ ಮೇಲೆ ಸವಾರಿ ಮಾಡುವ ಒಬ್ಬ ಮನುಷ್ಯನು; ಅವನು ತಗ್ಗಿನಲ್ಲಿದ್ದ ಗಂಧದ ಗಿಡಗಳ ನಡುವೆ ನಿಂತಿದ್ದನು; ಅವನ ಹಿಂದೆ ಕೆಂಪು ಕಪಿಲ ಬಿಳೀ ಕುದುರೆಗಳು ಇದ್ದವು.
1:9b.ZEC.001.009 ಆಗ ನಾನು--ಓ ನನ್ನ ಒಡೆಯನೇ, ಇವೇನು ಅಂದೆನು. ಆಗ ನನ್ನ ಸಂಗಡ ಮಾತನಾಡಿದ ದೂತ ನು--ಇವೇನೆಂದು ನಿನಗೆ ತೋರಿಸುತ್ತೇನೆ ಅಂದೆನು.
1:10b.ZEC.001.010 ಆಗ ಗಂಧದ ಗಿಡಗಳ ನಡುವೆ ನಿಂತ ಮನುಷ್ಯನು ಉತ್ತರಕೊಟ್ಟು ಹೇಳಿದ್ದೇನಂದರೆ--ಇವರು ಭೂಮಿ ಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ ನಡೆದಾಡುವದಕ್ಕೆ ಕರ್ತನು ಕಳುಹಿಸಿದವರು ಅಂದನು.
1:11b.ZEC.001.011 ಆಗ ಅವರು ಗಂಧದ ಗಿಡಗಳ ನಡುವೆ ನಿಂತ ಕರ್ತನ ದೂತನಿಗೆ ಉತ್ತರಕೊಟ್ಟು ಹೇಳಿದ್ದೇನಂದರೆ -- ಭೂಮಿಯಲ್ಲಿ ಇತ್ತಿಂದ ಅತ್ತ ಅತ್ತಿಂದ ಇತ್ತ ನಡೆದಾಡಿದ್ದೇವೆ; ಇಗೋ, ಭೂಮಿಯೆಲ್ಲಾ ಸುಮ್ಮನಿದ್ದು ಶಾಂತಿಯಾಗಿದೆ ಅಂದರು.
1:12b.ZEC.001.012 ಆಗ ಕರ್ತನ ದೂತನು ಉತ್ತರಕೊಟ್ಟು ಹೀಗಂ ದನು--ಓ ಸೈನ್ಯಗಳ ಕರ್ತನೇ, ನೀನು ಯೆರೂಸಲೇ ಮನ್ನೂ ಯೆಹೂದದ ಪಟ್ಟಣಗಳನ್ನೂ ಎಷ್ಟರ ವರೆಗೆ ಕನಿಕರಿಸದೆ ಇರುವಿ? ಅವುಗಳ ಮೇಲೆ ಈ ಎಪ್ಪತ್ತು ವರುಷಗಳು ಸಿಟ್ಟು ಮಾಡಿದ್ದೀಯಲ್ಲವೋ ಅಂದನು.
1:13b.ZEC.001.013 ಆಗ ಕರ್ತನು ನನ್ನ ಸಂಗಡ ಮಾತನಾಡಿದ ದೂತನಿಗೆ ಒಳ್ಳೇ ಮಾತುಗಳಿಂದಲೂ ಆದರಣೆಯ ಮಾತು ಗಳಿಂದಲೂ ಉತ್ತರಕೊಟ್ಟನು.
1:14b.ZEC.001.014 ನನ್ನ ಸಂಗಡ ಮಾತ ನಾಡಿದ ದೂತನು ನನಗೆ ಹೇಳಿದ್ದೇನಂದರೆ--ಕೂಗಿ ಹೇಳು; ಏನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಾನು ಯೆರೂಸಲೇಮಿಗಾಗಿಯೂ ಚೀಯೋನಿ ಗಾಗಿಯೂ ಬಹುರೋಷವುಳ್ಳವನಾಗಿದ್ದೇನೆ.
1:15b.ZEC.001.015 ನಿಶ್ಚಿಂತೆ ಯುಳ್ಳವರಾಗಿರುವ ಅನ್ಯಜನಾಂಗದ ಮೇಲೆ ನಾನು ಬಹಳ ಕೋಪಿಸಿಕೊಂಡಿದ್ದೇನೆ. ನಾನು ಸ್ವಲ್ಪ ಕೋಪ ಮಾಡಿಕೊಂಡಾಗ ಅವರು ಸಂಕಟಕ್ಕೆ ಸಹಾಯಮಾಡಿ ದರು.
1:16b.ZEC.001.016 ಆದದರಿಂದ ಕರ್ತನು ಹೀಗೆ ಹೇಳುತ್ತಾನೆ --ನಾನು ಕನಿಕರದಿಂದ ಯೆರೂಸಲೇಮಿನ ಕಡೆಗೆ ತಿರುಗಿಕೊಂಡಿದ್ದೇನೆ; ನನ್ನ ಆಲಯವು ಅದರಲ್ಲಿ ಕಟ್ಟ ಲ್ಪಡುವದೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಯೆರೂ ಸಲೇಮಿನ ಮೇಲೆ ಅಳತೆ ನೂಲು ಚಾಚಲ್ಪಡುವದು.
1:17b.ZEC.001.017 ಇನ್ನೂ ಕೂಗಿ ಹೇಳು, ಏನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಪಟ್ಟಣಗಳು ಇನ್ನು ಅಭಿವೃದ್ಧಿಯಾಗಿ ಹರಡುವವು; ಕರ್ತನು ಚೀಯೋನನ್ನು ಇನ್ನು ಆದರಿಸುವನು; ಯೆರೂಸಲೇಮನ್ನು ಇನ್ನು ಆದುಕೊಳ್ಳುವನು.
1:18b.ZEC.001.018 ನಾನು ನನ್ನ ಕಣ್ಣುಗಳನ್ನು ಎತ್ತಿದಾಗ ಇಗೋ, ನಾಲ್ಕು ಕೊಂಬುಗಳನ್ನು ನೋಡಿದೆನು.
1:19b.ZEC.001.019 ಆಗ ನನ್ನ ಕೂಡ ಮಾತನಾಡಿದ ದೂತನಿಗೆ ನಾನು--ಇದೇನು ಅಂದೆನು. ಅದಕ್ಕೆ ಅವನು ನನಗೆ ಉತ್ತರಕೊಟ್ಟು--ಇವು ಯೆಹೂದವನ್ನೂ ಇಸ್ರಾಯೇಲನ್ನೂ ಯೆರೂಸ ಲೇಮನ್ನೂ ಚದರಿಸಿದ ಕೊಂಬುಗಳು ಅಂದನು.
1:20b.ZEC.001.020 ಆಗ ಕರ್ತನು ನನಗೆ ನಾಲ್ಕು ಬಡಗಿಯವರನ್ನು ತೋರಿಸಿದನು.ಆಗ ನಾನು--ಇವರು ಏನು ಮಾಡುವದಕ್ಕೆ ಬರುತ್ತಾರೆ ಅಂದೆನು. ಅದಕ್ಕೆ ಆತನು ಮಾತನಾಡಿ ಹೇಳಿದ್ದೇನಂದರೆ--ಯಾವನಾದರೂ ತಲೆಯನ್ನು ಎತ್ತದ ಹಾಗೆ ಯೆಹೂದವನ್ನು ಚದರಿಸಿದ ಕೊಂಬುಗಳು. ಆದರೆ ಇವರು ಅವರನ್ನು ಹೆದರಿಸಿ ಯೆಹೂದ ದೇಶದ ಮೇಲೆ ಅದನ್ನು ಚದರಿಸುವದಕ್ಕೆ ಕೊಂಬನ್ನು ಎತ್ತಿದ ಅನ್ಯಜನಾಂಗಗಳ ಕೊಂಬುಗಳನ್ನು ಕೆಳಗೆ ಹಾಕುವದಕ್ಕೆ ಬಂದಿದ್ದಾರೆ ಅಂದನು.
1:21b.ZEC.001.021 ಆಗ ನಾನು--ಇವರು ಏನು ಮಾಡುವದಕ್ಕೆ ಬರುತ್ತಾರೆ ಅಂದೆನು. ಅದಕ್ಕೆ ಆತನು ಮಾತನಾಡಿ ಹೇಳಿದ್ದೇನಂದರೆ--ಯಾವನಾದರೂ ತಲೆಯನ್ನು ಎತ್ತದ ಹಾಗೆ ಯೆಹೂದವನ್ನು ಚದರಿಸಿದ ಕೊಂಬುಗಳು. ಆದರೆ ಇವರು ಅವರನ್ನು ಹೆದರಿಸಿ ಯೆಹೂದ ದೇಶದ ಮೇಲೆ ಅದನ್ನು ಚದರಿಸುವದಕ್ಕೆ ಕೊಂಬನ್ನು ಎತ್ತಿದ ಅನ್ಯಜನಾಂಗಗಳ ಕೊಂಬುಗಳನ್ನು ಕೆಳಗೆ ಹಾಕುವದಕ್ಕೆ ಬಂದಿದ್ದಾರೆ ಅಂದನು.
2
2:1b.ZEC.002.001 ತಿರುಗಿ ನನ್ನ ಕಣ್ಣುಗಳನ್ನೆತ್ತಿ ನೋಡಲು ಇಗೋ, ತನ್ನ ಕೈಯಲ್ಲಿ ಅಳೆಯುವ ನೂಲಿದ್ದ ಒಬ್ಬ ಮನುಷ್ಯನನ್ನು ಕಂಡೆನು.
2:2b.ZEC.002.002 ಆಗ ನಾನು--ನೀನು ಎಲ್ಲಿಗೆ ಹೋಗುತ್ತೀ ಅಂದೆನು; ಅದಕ್ಕವನು ನನಗೆ--ಯೆರೂಸಲೇಮನ್ನು ಅಳತೆಮಾಡಿ ಅದರ ಅಗಲವೆಷ್ಟು ಅದರ ಉದ್ದವೆಷ್ಟು ಎಂದು ನೋಡುವದಕ್ಕೆ ಬಂದಿದ್ದಾರೆ ಅಂದನು.
2:3b.ZEC.002.003 ಇಗೋ, ನನ್ನ ಸಂಗಡ ಮಾತನಾಡಿದ ದೂತನು ಹೊರಟನು; ಇನ್ನೊಬ್ಬ ದೂತನು ಅವನನ್ನು ಎದುರುಗೊಳ್ಳುವದಕ್ಕೆ ಹೊರಟನು.
2:4b.ZEC.002.004 ಇವನು ಅವನಿಗೆ ಹೀಗಂದನು--ಓಡಿಹೋಗಿ ಈ ಯೌವನಸ್ಥನಿಗೆ ಹೀಗೆ ಹೇಳು, ಏನಂದರೆ--ಯೆರೂಸಲೇಮು ಅದರಲ್ಲಿರುವ ಮನು ಷ್ಯರ ಮತ್ತು ದನಗಳ ಸಂಖ್ಯೆ ಹೆಚ್ಚಾದದ್ದರಿಂದ ಗೋಡೆ ಇಲ್ಲದ ಊರುಗಳಂತೆ ನಿವಾಸವಾಗುವದು.
2:5b.ZEC.002.005 ಯಾಕಂ ದರೆ ನಾನು ಅದರ ಸುತ್ತಲೂ ಬೆಂಕಿಯ ಗೋಡೆಯಾ ಗಿಯೂ ಅದರ ಮಧ್ಯದಲ್ಲಿ ಮಹಿಮೆಯಾಗಿಯೂ ಇರುವೆನೆಂದು ಕರ್ತನು ಅನ್ನುತ್ತಾನೆ.
2:6b.ZEC.002.006 ಓಹೋ, ನೀವು ಹೊರಗೆ ಬಂದು ಉತ್ತರ ದೇಶ ದಿಂದ ಓಡಿಹೋಗಿರಿ; ಆಕಾಶದ ನಾಲ್ಕು ದಿಕ್ಕುಗಳಂತೆ ನಿಮ್ಮನ್ನು ಚದರಿಸಿದ್ದೇನೆಂದು ಕರ್ತನು ಅನ್ನುತ್ತಾನೆ.
2:7b.ZEC.002.007 ಓ ಚೀಯೋನೇ, ಬಾಬೆಲಿನ ಮಗಳ ಬಳಿಯಲ್ಲಿ ವಾಸವಾಗಿರುವವಳೇ, ತಪ್ಪಿಸಿಕೋ.
2:8b.ZEC.002.008 ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮನ್ನು ಸುಲುಕೊಂಡ ಜನಾಂಗ ಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ; ನಿಮ್ಮನ್ನು ಮುಟ್ಟುವವನು ಆತನ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ.
2:9b.ZEC.002.009 ಇಗೋ, ನಾನು ನನ್ನ ಕೈಯನ್ನು ಅವರ ಮೇಲೆ ಜಾಡಿಸುತ್ತೇನೆ; ಆಗ ಅವರು ತಮ್ಮ ದಾಸರಿಗೆ ಕೊಳ್ಳೆಯಾಗುವರು; ಸೈನ್ಯಗಳ ಕರ್ತನು ನನ್ನನ್ನು ಕಳುಹಿಸಿದನೆಂದು ನೀವು ತಿಳಿಯುವಿರಿ.
2:10b.ZEC.002.010 ಚೀಯೋನ್ ಕುಮಾರ್ತೆಯೇ, ಹಾಡಿ ಹರ್ಷಿಸು. ಇಗೋ, ನಾನು ಬಂದು ನಿನ್ನ ಮಧ್ಯದಲ್ಲಿ ವಾಸವಾಗಿರುವೆನೆಂದು ಕರ್ತನು ಅನ್ನುತ್ತಾನೆ.
2:11b.ZEC.002.011 ಇದ ಲ್ಲದೆ ಆ ದಿನದಲ್ಲಿ ಅನೇಕ ಜನಾಂಗಗಳು ಕರ್ತನಿಗೆ ಅಂಟಿಕೊಂಡು ನನ್ನ ಜನರಾಗುವರು; ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು; ಸೈನ್ಯಗಳ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂದು ತಿಳುಕೊಳ್ಳುವಿ.
2:12b.ZEC.002.012 ಇದಲ್ಲದೆ ಕರ್ತನು ತನ್ನ ಭಾಗವಾದ ಯೆಹೂದವನ್ನು ಪರಿಶುದ್ಧ ದೇಶದಲ್ಲಿ ಸ್ವಾಸ್ತ್ಯವಾಗಿ ಹೊಂದುವನು. ಯೆರೂಸಲೇಮನ್ನು ತಿರುಗಿ ಆದು ಕೊಳ್ಳುವನು.ಓ ಮನುಷ್ಯರೇ, ನೀವೆಲ್ಲಾ ಕರ್ತನ ಮುಂದೆ ಮೌನ ವಾಗಿರ್ರಿ; ಆತನು ತನ್ನ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾನೆ.
2:13b.ZEC.002.013 ಓ ಮನುಷ್ಯರೇ, ನೀವೆಲ್ಲಾ ಕರ್ತನ ಮುಂದೆ ಮೌನ ವಾಗಿರ್ರಿ; ಆತನು ತನ್ನ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾನೆ.
3
3:1b.ZEC.003.001 ಇದಲ್ಲದೆ ಆತನು ನನಗೆ--ಕರ್ತನ ದೂತನ ಮುಂದೆ ನಿಂತಿರುವ ಪ್ರಧಾನ ಯಾಜಕನಾದ ಯೆಹೋಶುವನನ್ನೂ ಅವನನ್ನು ಎದುರಿಸುವದಕ್ಕೆ ಅವನ ಬಲಪಾರ್ಶ್ವದಲ್ಲಿ ನಿಂತ ಸೈತಾನನನ್ನೂ ತೋರಿಸಿದನು.
3:2b.ZEC.003.002 ಆಗ ಕರ್ತನ ದೂತನು ಸೈತಾನನಿಗೆ--ಸೈತಾನನೇ, ಕರ್ತನು ನಿನ್ನನ್ನು ಗದರಿಸಲಿ; ಹೌದು, ಯೆರೂಸಲೇಮನ್ನು ಆದುಕೊಂಡ ಕರ್ತನು ನಿನ್ನನ್ನು ಗದರಿಸಲಿ; ಅದು ಬೆಂಕಿಯೊಳಗಿಂದ ಎಳೆದ ಕೊಳ್ಳೆಯಾಗಿದೆಯಲ್ಲವೋ ಅಂದನು.
3:3b.ZEC.003.003 ಯೆಹೋಶು ವನು ಮೈಲಿಗೆಯಾದ ವಸ್ತ್ರಗಳನ್ನು ತೊಟ್ಟುಕೊಂಡವ ನಾಗಿ ದೂತನ ಮುಂದೆ ನಿಂತನು.
3:4b.ZEC.003.004 ಆಗ ಅವನು ಉತ್ತರಕೊಟ್ಟು ತನ್ನ ಮುಂದೆ ನಿಂತವರಿಗೆ--ಇವನ ಮೇಲಿನಿಂದ ಮೈಲಿಗೆಯಾದ ವಸ್ತ್ರಗಳನ್ನು ತೆಗೆದು ಹಾಕಿರಿ ಅಂದನು. ಅವನಿಗೆ--ಇಗೋ, ನಿನ್ನ ಅಕ್ರಮವು ನಿನ್ನನ್ನು ಬಿಟ್ಟುಹೋಗುವಂತೆ ಮಾಡಿದ್ದೇನೆ; ಬದಲು ವಸ್ತ್ರಗಳನ್ನು ನಿನಗೆ ತೊಡಿಸುವೆನು ಅಂದನು.
3:5b.ZEC.003.005 ಆಗ ನಾನು--ಅವನ ತಲೆಯ ಮೇಲೆ ಶುದ್ಧ ಮುಂಡಾಸವನ್ನು ಇಡಿರಿ ಅಂದೆನು. ಆಗ ಅವರು ಅವನ ತಲೆಯ ಮೇಲೆ ಶುದ್ಧ ಮುಂಡಾಸವನ್ನು ಇಟ್ಟು ಅವನಿಗೆ ನಿಲು ವಂಗಿಗಳನ್ನು ತೊಡಿಸಿದರು; ಕರ್ತನ ದೂತನು ಪಕ್ಕ ದಲ್ಲಿ ನಿಂತಿದ್ದನು.
3:6b.ZEC.003.006 ಆಗ ಕರ್ತನ ದೂತನು ಯೆಹೋ ಶುವನಿಗೆ ಸಾಕ್ಷಿ ಕೊಟ್ಟದ್ದೇನಂದರೆ--
3:7b.ZEC.003.007 ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಮಾರ್ಗಗಳಲ್ಲಿ ನಡೆದು ನನ್ನ ಆಜ್ಞೆಯನ್ನು ಕೈಕೋ, ಆಗ ನೀನು ನನ್ನ ಮನೆಗೂ ನ್ಯಾಯತೀರಿಸಿ ನನ್ನ ಅಂಗಳಗಳನ್ನೂ ಕಾಯುವಿ; ಇಲ್ಲಿ ನಿಂತವರ ಬಳಿಯಲ್ಲಿ ನಡೆದಾಡುವ ನಿನಗೆ ಸ್ಥಳಗಳನ್ನು ಕೊಡುವೆನು.
3:8b.ZEC.003.008 ಪ್ರಧಾನ ಯಾಜಕ ನಾದ ಓ ಯೆಹೋಶುವನೇ, ನೀನೂ ನಿನ್ನ ಮುಂದೆ ಕೂತುಕೊಳ್ಳುವ ನಿನ್ನ ಸಂಗಡಿಗರೂ ಈಗ ಕೇಳಿರಿ; ಅವರು ಆಶ್ಚರ್ಯವನ್ನುಂಟು ಮಾಡುವ ಮನುಷ್ಯರಾಗಿ ದ್ದಾರೆ; ಇಗೋ, ನಾನು ಕೊಂಬೆಯೆಂಬ ನನ್ನ ಸೇವಕ ನನ್ನು ಬರಮಾಡುವೆನು.
3:9b.ZEC.003.009 ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡು. ಒಂದು ಕಲ್ಲಿನ ಮೇಲೆ ಏಳು ಕಣ್ಣುಗಳು ಇರುವವು; ಇಗೋ, ನಾನು ಅದರ ಕೆತ್ತನೆಯಿಂದ ಕೆತ್ತುವೆನು; ಆ ದೇಶದ ಅಪರಾಧ ವನ್ನು ಒಂದೇ ದಿನದಲ್ಲಿ ತೊಲಗಿಸುವೆನು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.ಆ ದಿನದಲ್ಲಿ ನೀವು ನಿಮ್ಮ ನಿಮ್ಮ ನೆರೆಯವರನ್ನು ದ್ರಾಕ್ಷೇಬಳ್ಳಿಯ ಕೆಳಗೂ ಅಂಜೂರ ಮರದ ಕೆಳಗೂ ಕರೆಯುವಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
3:10b.ZEC.003.010 ಆ ದಿನದಲ್ಲಿ ನೀವು ನಿಮ್ಮ ನಿಮ್ಮ ನೆರೆಯವರನ್ನು ದ್ರಾಕ್ಷೇಬಳ್ಳಿಯ ಕೆಳಗೂ ಅಂಜೂರ ಮರದ ಕೆಳಗೂ ಕರೆಯುವಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
4
4:1b.ZEC.004.001 ಇದಲ್ಲದೆ ನನ್ನ ಸಂಗಡ ಮಾತನಾಡಿದ ದೂತನು ತಿರಿಗಿ ಬಂದು
4:2b.ZEC.004.002 ಒಬ್ಬನನ್ನು ನಿದ್ರೆಯಿಂದ ಎಬ್ಬಿಸುವಂತೆ ನನ್ನನ್ನು ಎಬ್ಬಿಸಿದನು. ಆಗ ಅವನು ನನಗೆ--ನೀನು ಏನು ನೋಡುತ್ತೀ ಅಂದನು. ಅದಕ್ಕೆ--ನಾನು ನೋಡಿದ್ದೇನೆ; ಇಗೋ, ಒಂದು ದೀಪಸ್ತಂಭವು, ಅದು ಎಲ್ಲಾ ಬಂಗಾರದ್ದೇ; ಅದರ ತಲೆಯ ಮೇಲೆ ಪಾತ್ರೆ ಉಂಟು; ಅದರ ಮೇಲೆ ಅದರ ಏಳು ದೀಪಗಳುಂಟು.
4:3b.ZEC.004.003 ಅದರ ತಲೆಯ ಮೇಲಿರುವ ಏಳು ದೀಪಗಳಿಗೆ ಏಳು ಕೊಳವೆಗಳುಂಟು, ಅದರ ಬಳಿಯಲ್ಲಿ ಎರಡು ಇಪ್ಪೇಮರಗಳು, ಪಾತ್ರೆಯ ಬಲಗಡೆಯಲ್ಲಿ ಒಂದೂ ಪಾತ್ರೆಯ ಎಡಗಡೆಯಲ್ಲಿ ಒಂದೂ ಉಂಟು ಅಂದೆನು.
4:4b.ZEC.004.004 ಹೀಗೆ ನಾನು ಉತ್ತರ ಕೊಟ್ಟು ನನ್ನ ಸಂಗಡ ಮಾತನಾಡಿದ ದೂತನಿಗೆ --ನನ್ನ ಒಡೆಯನೇ, ಇವೇನು ಅಂದೆನು.
4:5b.ZEC.004.005 ಆಗ ನನ್ನ ಸಂಗಡ ಮಾತನಾಡಿದ ದೂತನು ಉತ್ತರ ಕೊಟ್ಟು ನನಗೆ--ಇವೇನೆಂದು ಅರಿಯುವದಿಲ್ಲವೋ ಅಂದನು.
4:6b.ZEC.004.006 ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು ಉತ್ತರಕೊಟ್ಟು ನನಗೆ ಹೇಳಿದ್ದೇನಂದರೆ--ಜೆರುಬ್ಬಾಬೆಲನಿಗೆ ಕರ್ತನ ವಾಕ್ಯವು ಇದೇ--ಬಲ ದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
4:7b.ZEC.004.007 ಓ ಮಹಾ ಬೆಟ್ಟವೇ, ನೀನ್ಯಾರು? ಜೆರುಬ್ಬಾಬೆಲನ ಮುಂದೆ ಬೈಲಾಗುವಿ; ಅದಕ್ಕೆ--ಕೃಪೆಯೇ, ಕೃಪೆಯೇ ಎಂದು ಅರ್ಭಟಗಳ ಸಂಗಡ ಮುಖ್ಯ ಕಲ್ಲನ್ನು ಅವನು ಹೊರಗೆ ತರುವನು.
4:8b.ZEC.004.008 ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಯಿತು. ಹೇಗಂದರೆ--
4:9b.ZEC.004.009 ಜೆರುಬ್ಬಾಬೆಲನ ಕೈಗಳು ಈ ಮನೆಯ ಅಸ್ತಿವಾರವನ್ನು ಹಾಕಿವೆ, ಅವನ ಕೈಗಳು ಸಹ ಅದನ್ನು ಪೂರೈಸುವವು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ.
4:10b.ZEC.004.010 ಸಣ್ಣ ಕಾರ್ಯಗಳ ದಿನವನ್ನು ತಿರಸ್ಕರಿಸಿದವನ್ಯಾರು? ಆ ಏಳು ಅಂದರೆ ಭೂಮಿಯಲ್ಲೆಲ್ಲಾ ಅತ್ತಿತ್ತ ಓಡಾಡುವ ಕರ್ತನ ಕಣ್ಣುಗಳು ನೂಲು ಗುಂಡನ್ನು ಜೆರುಬ್ಬಾಬೆಲನ ಕೈಯಲ್ಲಿ ನೋಡುವಾಗ ಸಂತೋಷಪಡುತ್ತವೆ.
4:11b.ZEC.004.011 ಆಗ ನಾನು ಉತ್ತರ ಕೊಟ್ಟು ಅವನಿಗೆ--ದೀಪಸ್ತಂಭದ ಬಲಗಡೆಯಲ್ಲಿಯೂ ಎಡಗಡೆಯಲ್ಲಿಯೂ ಇರುವ ಈ ಎರಡು ಇಪ್ಪೇಮರಗಳು ಏನು ಅಂದೆನು.
4:12b.ZEC.004.012 ನಾನು ಎರಡನೇ ಸಾರಿ ಉತ್ತರ ಕೊಟ್ಟು ಅವನಿಗೆ--ಎರಡು ಚಿನ್ನದ ನಾಳಗಳಿಂದ ಚಿನ್ನದಂಥಹ ಎಣ್ಣೆಯನ್ನು ತಮ್ಮೊಳ ಗಿಂದ ಸುರಿಯುವ ಈ ಎರಡು ಇಪ್ಪೇ ಕೊಂಬೆಗಳು ಏನು ಅಂದೆನು.
4:13b.ZEC.004.013 ಅವನು ನನಗೆ--ಇವು ಏನೆಂದು ಅರಿಯು ವದಿಲ್ಲವೋ ಅಂದನು.ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು--ಸಮಸ್ತ ಭೂಮಿಯ ಕರ್ತನ ಬಳಿಯಲ್ಲಿ ನಿಲ್ಲುವ ಇಬ್ಬರು ಅಭಿಷೇಕಿಸಲ್ಪಟ್ಟವರು ಇವರೇ ಅಂದನು.
4:14b.ZEC.004.014 ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು--ಸಮಸ್ತ ಭೂಮಿಯ ಕರ್ತನ ಬಳಿಯಲ್ಲಿ ನಿಲ್ಲುವ ಇಬ್ಬರು ಅಭಿಷೇಕಿಸಲ್ಪಟ್ಟವರು ಇವರೇ ಅಂದನು.
5
5:1b.ZEC.005.001 ಆಗ ನಾನು ತಿರಿಗಿಕೊಂಡು ನನ್ನ ಕಣ್ಣು ಗಳನ್ನೆತ್ತಿ ನೋಡಲು ಇಗೋ, ಹಾರುವ ಸುರಳಿ.
5:2b.ZEC.005.002 ಆಗ ಅವನು ನನಗೆ--ಏನು ನೋಡುತ್ತೀ ಅಂದಾಗ ನಾನು--ಹಾರುವ ಸುರಳಿಯನ್ನು ನೋಡು ತ್ತೇನೆ; ಅದರ ಉದ್ದವು ಇಪ್ಪತ್ತು ಮೊಳಗಳಾಗಿಯೂ ಅದರ ಅಗಲವು ಹತ್ತು ಮೊಳಗಳಾಗಿಯೂ ಇದೆ ಅಂದೆನು.
5:3b.ZEC.005.003 ಆಗ ಅವನು ನನಗೆ ಹೇಳಿದ್ದೇನಂದರೆ--ದೇಶದ ಮೇಲೆಲ್ಲಾ ಹೊರಡುವ ಶಾಪವು ಇದೇ; ಕಳ್ಳತನ ಮಾಡುವವರೆಲ್ಲರು ಈ ದಿಕ್ಕಿನ ಪ್ರಕಾರ ತೆಗೆದುಹಾಕಲ್ಪಡುವರು; ಆಣೆ ಇಡುವವರೆಲ್ಲರು ಆ ಕಡೆ ಅದರ ಪ್ರಕಾರ ತೆಗೆದುಹಾಕಲ್ಪಡುವರು.
5:4b.ZEC.005.004 ನಾನು ಅದನ್ನು ಹೊರಗೆ ತರುತ್ತೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಅದು ಕಳ್ಳನ ಮನೆಯಲ್ಲಿಯೂ ನನ್ನ ಹೆಸರಿನಿಂದ ಸುಳ್ಳಾಗಿ ಆಣೆಯಿಡುವವನ ಮನೆಯ ಲ್ಲಿಯೂ ಪ್ರವೇಶಿಸಿ ಅವನ ಮನೆಯ ಮಧ್ಯದಲ್ಲಿ ನಿಂತು ಅದರ ಮರಗಳನ್ನೂ ಅದರ ಕಲ್ಲುಗಳನ್ನೂ ಅಳಿಸಿಬಿಡುವದು ಅಂದನು.
5:5b.ZEC.005.005 ಆಗ ನನ್ನ ಸಂಗಡ ಮಾತನಾಡಿದ ದೂತನು ಹೊರಟು--ನಿನ್ನ ಕಣ್ಣುಗಳನ್ನೆತ್ತಿ ಹೊರಡುವಂಥದ್ದು ಏನೆಂದು ನೋಡು ಎಂದು ನನಗೆ ಹೇಳಿದನು.
5:6b.ZEC.005.006 ನಾನು --ಇದೇನು ಅಂದಾಗ ಅವನು--ಇದು ಹೊರಡು ವಂಥ ಎಫವು ಅಂದನು; ಇದಲ್ಲದೆ ಅವನು--ಇದೇ ಸಮಸ್ತ ಭೂಮಿಯಲ್ಲಿ ಅವರ ಹೋಲಿಕೆ ಅಂದನು.
5:7b.ZEC.005.007 ಇಗೋ, ಸೀಸದ ಮಣವು ಎತ್ತಲ್ಪಟ್ಟಿತು; ಎಫದ ಮಧ್ಯದಲ್ಲಿ ಒಬ್ಬ ಸ್ತ್ರೀ ಕೂತುಕೊಂಡಿದ್ದಳು. ಆಗ ಅವನು --ಇದು ದುಷ್ಟತ್ವವು ಎಂತಂದು
5:8b.ZEC.005.008 ಅವಳನ್ನು ಎಫದ ಮಧ್ಯದಲ್ಲಿ ಹಾಕಿ ಆ ನೂಲಿನ ಸೀಸದ ಭಾರವನ್ನು ಅದರ ಬಾಯಿಯ ಮೇಲೆ ಇಟ್ಟನು.
5:9b.ZEC.005.009 ಆಗ ನಾನು ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ಇಬ್ಬರು ಸ್ತ್ರೀಯರು ಹೊರಟರು; ಅವರ ರೆಕ್ಕೆಗಳಲ್ಲಿ ಗಾಳಿ ಇತ್ತು; ಹೌದು, ಅವರ ರೆಕ್ಕೆಗಳು ಕೊಕ್ಕರೆಯ ರೆಕ್ಕೆಗಳ ಹಾಗಿದ್ದವು; ಅವರು ಎಫವನ್ನು ಆಕಾಶಕ್ಕೂ ಭೂಮಿಗೂ ಮಧ್ಯದಲ್ಲಿ ಎತ್ತಿದರು.
5:10b.ZEC.005.010 ಆಗ ನಾನು ನನ್ನ ಸಂಗಡ ಮಾತನಾಡಿದ ದೂತನಿಗೆ--ಇವರು ಎಫವನ್ನು ಎಲ್ಲಿಗೆ ಹೊತ್ತು ಕ್ಕೊಂಡು ಹೋಗುತ್ತಾರೆ ಅಂದೆನು.ಅವನು ನನಗೆ --ಶಿನಾರ್ ದೇಶದಲ್ಲಿ ಅದಕ್ಕೆ ಮನೆ ಕಟ್ಟುವದಕ್ಕಾಗಿ ತಕ್ಕೊಂಡು ಹೋಗುತ್ತಾರೆ; ಅಲ್ಲಿ ಅದು ಸ್ಥಾಪಿಸಲ್ಪಟ್ಟು ತನ್ನ ಸ್ಥಾನದಲ್ಲಿ ಇರಿಸಲ್ಪಡುವದು ಅಂದನು.
5:11b.ZEC.005.011 ಅವನು ನನಗೆ --ಶಿನಾರ್ ದೇಶದಲ್ಲಿ ಅದಕ್ಕೆ ಮನೆ ಕಟ್ಟುವದಕ್ಕಾಗಿ ತಕ್ಕೊಂಡು ಹೋಗುತ್ತಾರೆ; ಅಲ್ಲಿ ಅದು ಸ್ಥಾಪಿಸಲ್ಪಟ್ಟು ತನ್ನ ಸ್ಥಾನದಲ್ಲಿ ಇರಿಸಲ್ಪಡುವದು ಅಂದನು.
6
6:1b.ZEC.006.001 ನಾನು ತಿರುಗಿಕೊಂಡು ನನ್ನ ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ನಾಲ್ಕು ರಥಗಳು ಎರಡು ಬೆಟ್ಟಗಳ ನಡುವೆಯಿಂದ ಹೊರಟುಬಂದವು; ಆ ಬೆಟ್ಟಗಳು ಹಿತ್ತಾಳೆಯ ಬೆಟ್ಟಗಳಾಗಿದ್ದವು.
6:2b.ZEC.006.002 ಮೊದಲನೇ ರಥಕ್ಕೆ ಕೆಂಪು ಕುದುರೆಗಳಿದ್ದವು; ಎರಡನೇ ರಥಕ್ಕೆ ಕಪ್ಪು ಕುದುರೆಗಳು;
6:3b.ZEC.006.003 ಮೂರನೇ ರಥಕ್ಕೆ ಬಿಳಿ ಕುದುರೆಗಳು; ನಾಲ್ಕನೇ ರಥಕ್ಕೆ ಕಪಿಲ ವರ್ಣದ ಕುದುರೆಗಳು.
6:4b.ZEC.006.004 ಆಗ ನಾನು ಉತ್ತರ ಕೊಟ್ಟು ನನ್ನ ಸಂಗಡ ಮಾತನಾಡಿದ ದೂತನಿಗೆ--ನನ್ನ ಒಡೆಯನೇ, ಇದೇನು ಅಂದೆನು.
6:5b.ZEC.006.005 ದೂತನು ನನಗೆ ಉತ್ತರಕೊಟ್ಟು ಹೇಳಿದ್ದೇನಂದರೆ--ಇವು ಆಕಾಶಗಳ ನಾಲ್ಕು ಆತ್ಮಗಳು; ಇವು ಸಮಸ್ತ ಭೂಮಿಯ ಕರ್ತನ ಮುಂದೆ ನಿಂತಲ್ಲಿಂದ ಹೊರಟುಬಂದವೆ.
6:6b.ZEC.006.006 ಆ ಕಪ್ಪು ಕುದುರೆಗಳು ಉತ್ತರ ದೇಶಕ್ಕೆ ಹೊರಡುತ್ತವೆ; ಬಿಳಿಯವುಗಳು ಇವುಗಳ ಹಿಂದೆ ಹೊರಡುತ್ತವೆ; ಚುಕ್ಕೆಗಳಿದ್ದವುಗಳು ದಕ್ಷಿಣ ದೇಶಕ್ಕೆ ಹೊರಡುತ್ತವೆ.
6:7b.ZEC.006.007 ಕಪಿಲ ವರ್ಣದವುಗಳು ಹೊರಟು ದೇಶದಲ್ಲಿ ಸಂಚಾರ ಮಾಡಹೋಗುವದಕ್ಕೆ ನೋಡಿದವು ಅಂದನು. ಆಗ ಅವನು--ಹೋಗಿ ದೇಶದಲ್ಲಿ ಅತ್ತಿತ್ತ ನಡೆದಾಡುವದಕ್ಕೆ ಇಲ್ಲಿಂದ ಹೋಗಿರಿ ಅಂದನು; ಹಾಗೆ ಅವು ದೇಶದಲ್ಲಿ ಅತ್ತಿತ್ತ ತಿರುಗಾಡಿದವು.
6:8b.ZEC.006.008 ಆಗ ಅವನು ನನಗೆ ಕೂಗಿ ಹೇಳಿದ್ದೇನಂ ದರೆ--ನೋಡು, ಉತ್ತರ ದೇಶಕ್ಕೆ ಹೊರಟವುಗಳು ಉತ್ತರ ದೇಶದಲ್ಲಿ ನನ್ನ ಆತ್ಮವನ್ನು ಶಾಂತಿಪಡಿಸಿವೆ ಅಂದನು.
6:9b.ZEC.006.009 ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಯಿತು.
6:10b.ZEC.006.010 ಹೇಗಂದರೆ--ಆ ಸೆರೆಯವರಿಂದ ಅಂದರೆ ಬಾಬೆಲಿ ನಿಂದ ಬಂದಿರುವ ಹೆಲ್ದಾಯನಿಂದಲೂ ತೋಬೀಯ ನಿಂದಲೂ ಯೆದಾಯನಿಂದಲೂ ತಕ್ಕೊಂಡು ಅದೇ ದಿವಸದಲ್ಲಿ ನೀನು ಬಂದು ಚೆಫನ್ಯನ ಮಗನಾದ ಯೋಷೀಯನ ಮನೆಗೆ ಹೋಗಿ
6:11b.ZEC.006.011 ಬೆಳ್ಳಿಬಂಗಾರವನ್ನು ತಕ್ಕೊಂಡು ಕಿರೀಟಗಳನ್ನು ಮಾಡಿ ಅವುಗಳನ್ನು ಯೆಹೋಚಾದಾಕನ ಮಗನಾದ ಪ್ರಧಾನ ಯಾಜಕ ನಾದ ಯೆಹೋಶುವನ ತಲೆಯ ಮೇಲೆ ಇಟ್ಟು
6:12b.ZEC.006.012 ಅವನಿಗೆ ಹೇಳತಕ್ಕದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿಗುರೆಂದು ಹೆಸರುಳ್ಳ ಮನುಷ್ಯನು, ಅವನು ತನ್ನ ಸ್ಥಳದೊಳಗಿಂದ ಚಿಗುರು ವನು, ಆತನೇ ಕರ್ತನ ದೇವಾಲಯವನ್ನು ಕಟ್ಟುವನು.
6:13b.ZEC.006.013 ಹೌದು, ಆತನು ಕರ್ತನ ದೇವಾಲಯವನ್ನು ಕಟ್ಟು ವನು; ಆತನು ಮಹಿಮೆಯನ್ನು ಧರಿಸುವನು; ಕೂತು ಕೊಂಡು ತನ್ನ ಸಿಂಹಾಸನದಲ್ಲಿ ಆಳುವನು, ತನ್ನ ಸಿಂಹಾಸನದಲ್ಲಿ ಯಾಜಕನಾಗಿರುವನು; ಸಮಾಧಾನದ ಆಲೋಚನೆ ಅವರಿಬ್ಬರೊಳಗೆ ಇರುವದು.
6:14b.ZEC.006.014 ಆ ಕಿರೀಟಗಳು ಹೇಲೆಮನಿಗೂ ತೋಬೀಯನಿಗೂ ಯೆದಾಯನಿಗೂ ಚೆಫನ್ಯನ ಮಗನಾದ ಹೇನನಿಗೂ ಕರ್ತನ ದೇವಾಲಯದಲ್ಲಿ ಜ್ಞಾಪಕಾರ್ಥವಾಗಿ ಇರು ವವು.ದೂರವಾದವರು ಬಂದು ಕರ್ತನ ದೇವಾ ಲಯವನ್ನು ಕಟ್ಟುವರು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ; ನೀವು ನಿಮ್ಮ ದೇವರಾದ ಕರ್ತನ ಶಬ್ದಕ್ಕೆ ಜಾಗ್ರತೆಯಾಗಿ ಕಿವಿಗೊಟ್ಟರೆ ಇದು ನೆರವೇರುವದು.
6:15b.ZEC.006.015 ದೂರವಾದವರು ಬಂದು ಕರ್ತನ ದೇವಾ ಲಯವನ್ನು ಕಟ್ಟುವರು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ; ನೀವು ನಿಮ್ಮ ದೇವರಾದ ಕರ್ತನ ಶಬ್ದಕ್ಕೆ ಜಾಗ್ರತೆಯಾಗಿ ಕಿವಿಗೊಟ್ಟರೆ ಇದು ನೆರವೇರುವದು.
7
7:1b.ZEC.007.001 ಅರಸನಾದ ದಾರ್ಯಾವೆಷನ ನಾಲ್ಕನೇ ವರುಷದಲ್ಲಿ ಆದದ್ದೇನಂದರೆ--ಒಂಭ ತ್ತನೇ ತಿಂಗಳಾದ ಕಿಸ್ಲೇವಿನ ನಾಲ್ಕನೇ ದಿವಸದಲ್ಲಿ ಕರ್ತನ ವಾಕ್ಯವು ಜೆಕರ್ಯನಿಗೆ ಉಂಟಾಯಿತು.
7:2b.ZEC.007.002 ಯಾವಾಗಂದರೆ, ಕರ್ತನ ಮುಖದ ಮುಂದೆ ಬೇಡಿ ಕೊಳ್ಳುವದಕ್ಕೂ
7:3b.ZEC.007.003 ಸೈನ್ಯಗಳ ಕರ್ತನ ಮನೆಯಲ್ಲಿದ್ದ ಯಾಜಕರ ಸಂಗಡಲೂ ಪ್ರವಾದಿಗಳ ಸಂಗಡಲೂ ನಾನು ಮಾತನಾಡಿ--ಇಷ್ಟು ವರುಷ ಮಾಡಿದ ಪ್ರಕಾರ ಐದನೇ ತಿಂಗಳಲ್ಲಿ ನನ್ನನ್ನು ಪ್ರತ್ಯೇಕಿಸಿಕೊಂಡು ಅಳಲೋ ಎಂದು ಹೇಳುವದಕ್ಕೂ ಅವರು ಸರೆಚರ ನನ್ನೂ ರೆಗೆಮ್ ಮೆಲೆಕನನ್ನೂ ಅವರ ಮನುಷ್ಯ ರನ್ನೂ ದೇವರ ಆಲಯಕ್ಕೆ ಕಳುಹಿಸಿದಾಗಲೇ ಅಂದನು.
7:4b.ZEC.007.004 ಆಗ ಸೈನ್ಯಗಳ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
7:5b.ZEC.007.005 ದೇಶದ ಜನರೆಲ್ಲರಿಗೂ ಯಾಜಕ ರಿಗೂ ಹೀಗೆ ಹೇಳು--ನೀವು ಈ ಎಪ್ಪತ್ತು ವರುಷಗಳು ಐದನೇ ಮತ್ತು ಏಳನೇ ತಿಂಗಳುಗಳಲ್ಲಿ ಉಪವಾಸ ಮಾಡಿ ದುಃಖಿಸಿದಾಗ ನನಗೆ ಏನಾದರೂ ಉಪವಾಸ ಮಾಡಿದ್ದೀರೋ?
7:6b.ZEC.007.006 ನೀವು ಉಂಡು ಕುಡಿದಾಗ ನಿಮಗೆ ನೀವೇ ಉಂಡು ಕುಡಿದಿರಲ್ಲಾ?
7:7b.ZEC.007.007 ಯೆರೂಸಲೇಮೂ ಅದರ ಸುತ್ತಲಿನ ಪಟ್ಟಣಗಳೂ ನಿವಾಸಿಗಳುಳ್ಳ ವುಗಳಾಗಿಯೂ ಸುಖವಾಗಿಯೂ ದಕ್ಷಿಣವೂ ಬೈಲೂ ನಿವಾಸಿಗಳುಳ್ಳವುಗಳಾಗಿಯೂ ಇದ್ದಾಗ ಕರ್ತನು ಪೂರ್ವದ ಪ್ರವಾದಿಗಳ ಕೈಯಿಂದ ಕೂಗಿದ ಮಾತುಗಳು ಅವು ಅಲ್ಲವೊ? ಎಂಬದು.
7:8b.ZEC.007.008 ಇದಲ್ಲದೆ ಕರ್ತನ ವಾಕ್ಯವು ಜೆಕರ್ಯನಿಗೆ ಉಂಟಾಗಿ ಹೇಳಿದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಮಾತನಾಡಿ ಹೇಳುತ್ತಾನೆ--
7:9b.ZEC.007.009 ನಿಜವಾದ ನ್ಯಾಯವನ್ನು ತೀರಿಸಿರಿ; ಒಬ್ಬರಿಗೊಬ್ಬರು ಕೃಪೆಯನ್ನೂ ಕನಿಕರವನ್ನೂ ತೋರಿಸಿರಿ;
7:10b.ZEC.007.010 ವಿಧವೆಗೂ ದಿಕ್ಕಿಲ್ಲದವನಿಗೂ ಅನ್ಯ ನಿಗೂ ಬಡವನಿಗೂ ಬಲಾತ್ಕಾರ ಮಾಡಬೇಡಿರಿ; ಯಾರೂ ತನ್ನ ಹೃದಯದಲ್ಲಿ ತನ್ನ ಸಹೋದರನ ಮೇಲೆ ಕೆಟ್ಟದ್ದನ್ನು ಕಲ್ಪಿಸದೆ ಇರಲಿ ಎಂಬದು.
7:11b.ZEC.007.011 ಆದರೆ ಅವರು ಕೇಳುವದಕ್ಕೆ ನಿರಾಕರಿಸಿದರು. ಅವರು ಹೆಗಲನ್ನು ಹಿಂದೆ ಳೆದು ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದಮಾಡಿ ಕೊಂಡರು.
7:12b.ZEC.007.012 ಹೌದು, ಅವರು ನ್ಯಾಯಪ್ರಮಾಣ ವನ್ನೂ ಸೈನ್ಯಗಳ ಕರ್ತನು ತನ್ನ ಆತ್ಮದ ಮುಖಾಂತರ ಪೂರ್ವದ ಪ್ರವಾದಿಗಳ ಕೈಯಿಂದ ಕಳುಹಿಸಿದ ವಾಕ್ಯ ಗಳನ್ನೂ ಕೇಳದ ಹಾಗೆ ತಮ್ಮ ಹೃದಯಗಳನ್ನು ವಜ್ರದ ಕಲ್ಲಿನಂತೆ ಮಾಡಿಕೊಂಡರು. ಆದದರಿಂದ ಸೈನ್ಯಗಳ ಕರ್ತನಿಂದ ಮಹಾರೋಷವು ಬಂತು.
7:13b.ZEC.007.013 ಆಗ ಆದದ್ದೇ ನಂದರೆ--ಅವನು ಕೂಗಲು ಅವರು ಕೇಳದೆ ಇದ್ದ ಪ್ರಕಾರ ಅವರು ಕೂಗಲು ನಾನು ಕೇಳದೆ ಇದ್ದೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರ ಗಾಳಿಯಿಂದ ಚದರಿಸಿಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು; ಹಾದುಹೋಗುವವನೂ ತಿರುಗಿಕೊಳ್ಳುವವನೂ ಇಲ್ಲದೆ ಹೋದರು. ರಮ್ಯವಾದ ದೇಶವನ್ನು ಹಾಳಾಗಿ ಮಾಡಿದರು.
7:14b.ZEC.007.014 ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರ ಗಾಳಿಯಿಂದ ಚದರಿಸಿಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು; ಹಾದುಹೋಗುವವನೂ ತಿರುಗಿಕೊಳ್ಳುವವನೂ ಇಲ್ಲದೆ ಹೋದರು. ರಮ್ಯವಾದ ದೇಶವನ್ನು ಹಾಳಾಗಿ ಮಾಡಿದರು.
8
8:1b.ZEC.008.001 ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
8:2b.ZEC.008.002 ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಚೀಯೋನಿನ ವಿಷಯವಾಗಿ ಅತಿ ರೋಷಗೊಂಡಿದ್ದೆನು; ಅತಿ ಉಗ್ರದಿಂದ ಅದರ ವಿಷಯದಲ್ಲಿ ರೋಷವುಳ್ಳವನಾಗಿದ್ದೆನು.
8:3b.ZEC.008.003 ಕರ್ತನು ಹೀಗೆ ಹೇಳುತ್ತಾನೆ--ಚೀಯೋನಿಗೆ ನಾನು ತಿರಿಗಿ ಕೊಂಡಿದ್ದೇನೆ; ಯೆರೂಸಲೇಮಿನ ಮಧ್ಯದಲ್ಲಿ ವಾಸಿಸು ವೆನು; ಯೆರೂಸಲೇಮು ಸತ್ಯದ ಪಟ್ಟಣವೆಂದೂ ಸೈನ್ಯಗಳ ಕರ್ತನ ಪರ್ವತವು ಪರಿಶುದ್ಧ ಪರ್ವತ ವೆಂದೂ ಕರೆಯಲ್ಪಡುವದು.
8:4b.ZEC.008.004 ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇನ್ನು ಯೆರೂಸಲೇಮಿನ ಬೀದಿಗಳಲ್ಲಿ ಮುದುಕರೂ ಮುದುಕಿಯರೂ ವಾಸವಾಗಿರುವರು; ಕೇವಲ ವೃದ್ಧಾಪ್ಯದಿಂದ ಒಬ್ಬೊಬ್ಬನ ಕೈಯಲ್ಲಿ ಅವನವನ ಕೋಲು ಇರುವದು.
8:5b.ZEC.008.005 ಪಟ್ಟಣದ ಬೀದಿಗಳು ಆಡುವ ಬಾಲಕ ಬಾಲಕಿಯರಿಂದ ತುಂಬಿರುವವು.
8:6b.ZEC.008.006 ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇದು ಈ ದಿವಸಗಳಲ್ಲಿ ಉಳಿದ ಈ ಜನರ ಕಣ್ಣುಗಳಿಗೆ ಆಶ್ಚರ್ಯವಾಗಿ ತೋರಿ ದರೂ ಅದು ನನ್ನ ಕಣ್ಣುಗಳಿಗೂ ಸಹ ಆಶ್ಚರ್ಯವಾಗಿ ತೋರುವದೋ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
8:7b.ZEC.008.007 ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನನ್ನ ಜನರನ್ನು ಪೂರ್ವ ದಿಕ್ಕಿನ ದೇಶದಿಂದಲೂ ಪಶ್ಚಿಮ ದಿಕ್ಕಿನ ದೇಶದಿಂದಲೂ ರಕ್ಷಿಸುವೆನು.
8:8b.ZEC.008.008 ನಾನು ಅವರನ್ನು ತರುವೆನು; ಅವರು ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವರು; ಅವರು ನನ್ನ ಜನರಾಗಿ ರುವರು; ನಾನು ಸತ್ಯದಲ್ಲಿಯೂ ನೀತಿಯಲ್ಲಿಯೂ ಅವರ ದೇವರಾಗಿರುವೆನು.
8:9b.ZEC.008.009 ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ದೇವಾಲಯವನ್ನು ಕಟ್ಟುವ ಹಾಗೆ ಸೈನ್ಯಗಳ ಕರ್ತನ ಆಲಯದ ಅಸ್ತಿವಾರವು ಹಾಕಲ್ಪಟ್ಟ ದಿವಸದಲ್ಲಿದ್ದ ಪ್ರವಾದಿಗಳ ಬಾಯಿಂದಾದ ಈ ವಾಕ್ಯಗಳನ್ನು ಈ ದಿವಸಗಳಲ್ಲಿ ಕೇಳುವವರೇ, ನಿಮ್ಮ ಕೈಗಳು ಬಲವಾಗಿರಲಿ.
8:10b.ZEC.008.010 ಈ ದಿವಸಗಳಿಗಿಂತ ಮುಂಚೆ ಮನುಷ್ಯನಿಗೆ ಕೂಲಿ ಇರಲಿಲ್ಲ, ಪಶುಗಳಿಗೆ ಕೂಲಿ ಇರಲಿಲ್ಲ; ಇಲ್ಲವೆ ಹೋಗುವವ ನಿಗೂ ಬರುವವನಿಗೂ ಇಕ್ಕಟ್ಟಿನ ದೆಸೆಯಿಂದ ಸಮಾ ಧಾನವಿರಲಿಲ್ಲ. ನಾನು ಜನರೆಲ್ಲರಲ್ಲಿ ಪ್ರತಿಯೊಬ್ಬನನ್ನು ತನ್ನ ನೆರೆಯವನಿಗೆ ವಿರೋಧವಾಗಿ ಇಟ್ಟಿದ್ದೆನು.
8:11b.ZEC.008.011 ಆದರೆ ಈಗ ಉಳಿದ ಈ ಜನರಿಗೆ ನಾನು ಪೂರ್ವದ ದಿವಸಗಳಲ್ಲಿದ್ದ ಹಾಗೆ ಇರುವದಿಲ್ಲವೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
8:12b.ZEC.008.012 ಬೀಜವುವೃದ್ಧಿಯಾಗುವದು; ದ್ರಾಕ್ಷೇ ಬಳ್ಳಿ ತನ್ನ ಫಲವನ್ನು ಕೊಡುವದು; ಭೂಮಿಯು ತನ್ನ ಹುಟ್ಟುವಳಿಯನ್ನು ಹೆಚ್ಚಾಗಿ ಕೊಡುವದು; ಆಕಾಶ ಗಳು ತಮ್ಮ ಮಂಜನ್ನು ಕೊಡುವವು; ಈ ಜನರಲ್ಲಿ ಉಳಿದವರು ಇವುಗಳನ್ನೆಲ್ಲಾ ಸ್ವಾಧೀನ ಮಾಡಿಕೊಳ್ಳು ವಂತೆ ಮಾಡುವೆನು.
8:13b.ZEC.008.013 ಆಗುವದೇನಂದರೆ, ಓ ಯೆಹೂದದ ಮನೆತನದವರೇ, ಇಸ್ರಾಯೇಲಿನ ಮನೆತನದವರೇ, ನೀವು ಜನಾಂಗಗಳಲ್ಲಿ ಶಾಪವಾಗಿದ್ದ ಪ್ರಕಾರ ನಾನು ನಿಮ್ಮನ್ನು ರಕ್ಷಿಸುವೆನು ಮತ್ತು ನೀವು ಆಶೀರ್ವಾದವಾಗಿರುವಿರಿ; ಭಯಪಡಬೇಡಿರಿ; ನಿಮ್ಮ ಕೈಗಳು ಬಲವಾಗಿರಲಿ.
8:14b.ZEC.008.014 ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಪಿತೃಗಳು ನನಗೆ ಸಿಟ್ಟು ಎಬ್ಬಿಸಿದಾಗ ನಾನು ನಿಮ್ಮನ್ನು ಶಿಕ್ಷಿಸುವದಕ್ಕೆ ಯೋಚಿಸಿದೆನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ; ನಾನು ಪಶ್ಚಾತ್ತಾಪ ಪಡಲಿಲ್ಲ.
8:15b.ZEC.008.015 ನಾನು ತಿರುಗಿ ಈ ದಿವಸಗಳಲ್ಲಿ ಯೆರೂಸಲೇಮಿಗೂ ಯೆಹೂದದ ಮನೆತನದವರಿಗೂ ಒಳ್ಳೇದನ್ನು ಮಾಡಲು ಯೋಚಿಸಿದ್ದೇನೆ; ನೀವು ಭಯ ಪಡಬೇಡಿರಿ.
8:16b.ZEC.008.016 ನೀವು ಮಾಡತಕ್ಕ ಕಾರ್ಯಗಳು ಇವೇ--ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನು ಮಾತಾಡಲಿ; ನಿಜವಾದ ಸಮಾಧಾನಕರ ವಾದ ನ್ಯಾಯತೀರ್ವಿಕೆಯನ್ನು ನಿಮ್ಮ ಬಾಗಲು ಗಳಲ್ಲಿ ತೀರಿಸಿರಿ.
8:17b.ZEC.008.017 ನಿಮ್ಮ ಹೃದಯಗಳಲ್ಲಿ ಒಬ್ಬರ ಮೇಲೊ ಬ್ಬರು ಕೇಡನ್ನು ಕಲ್ಪಿಸದಿರ್ರಿ; ಸುಳ್ಳು ಪ್ರಮಾಣವನ್ನು ಪ್ರೀತಿಮಾಡಿದಿರಿ; ಇವುಗಳೆಲ್ಲವೂ ನಾನು ಹಗೆ ಮಾಡುವಂಥವುಗಳೇ ಎಂದು ಕರ್ತನು ಹೇಳುತ್ತಾನೆ.
8:18b.ZEC.008.018 ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
8:19b.ZEC.008.019 ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಾಲ್ಕನೇ ತಿಂಗಳಿನ ಉಪವಾಸವು, ಐದನೆ ಯದು, ಏಳನೆಯದು, ಹತ್ತನೆಯದು, ಯೆಹೂದದ ಮನೆತನದವರಿಗೆ ಸಂತೋಷವೂ ಸಂಭ್ರಮವೂ ಆನಂದವಾದ ಹಬ್ಬಗಳೂ ಆಗುವವು; ಆದರೆ ಸತ್ಯ ವನ್ನೂ ಸಮಾಧಾನವನ್ನೂ ಪ್ರೀತಿಮಾಡಿರಿ.
8:20b.ZEC.008.020 ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಜನಗಳೂ ಅನೇಕ ಪಟ್ಟಣಗಳ ನಿವಾಸಿಗಳೂ ಇನ್ನು ಬರುವರು;
8:21b.ZEC.008.021 ಒಂದರ ನಿವಾಸಿಗಳು ಮತ್ತೊಂದಕ್ಕೆ ಹೋಗಿ--ನಾವು ಕರ್ತನ ಮುಂದೆ ಬೇಡಿಕೊಳ್ಳುವದಕ್ಕೂ ಸೈನ್ಯಗಳ ಕರ್ತನನ್ನು ಹುಡುಕುವದಕ್ಕೂ ಬೇಗ ಹೋಗೋಣ; ನಾನು ಕೂಡ ಹೋಗುತ್ತೇನೆ ಎಂದು ಹೇಳುವರು.
8:22b.ZEC.008.022 ಹೌದು, ಅನೇಕ ಜನಗಳೂ ಬಲವಾದ ಜನಾಂಗಗಳೂ ಸೈನ್ಯಗಳ ಕರ್ತನನ್ನು ಯೆರೂಸಲೇಮಿನಲ್ಲಿ ಹುಡುಕುವದಕ್ಕೂ ಕರ್ತನ ಮುಂದೆ ಬೇಡಿಕೊಳ್ಳುವದಕ್ಕೂ ಬರುವವು.ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು.
8:23b.ZEC.008.023 ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು.
9
9:1b.ZEC.009.001 ಹದ್ರಾಕಿನ ದೇಶದ ವಿಷಯವಾದ ಕರ್ತನ ವಾಕ್ಯದ ಭಾರವು; ಅದು ದಮಸ್ಕದಲ್ಲಿ ತಂಗುವದು; ಮನುಷ್ಯನ ಕಣ್ಣುಗಳು ಇಸ್ರಾಯೇಲಿನ ಎಲ್ಲಾ ಗೋತ್ರಗಳಂತೆ ಕರ್ತನ ಕಡೆಗೆ ಇರುವವು.
9:2b.ZEC.009.002 ಹಮಾತು ಬಹಳ ಜ್ಞಾನವಿರುವ ತೂರ್ ಚೀದೋನ್ ಸಹ ಅದರ ಮೇರೆಯಾಗಿದೆ.
9:3b.ZEC.009.003 ತೂರ್ ತನಗಾಗಿ ಬಲವಾದ ಕೋಟೆಯನ್ನು ಕಟ್ಟಿಕೊಂಡು ಬೆಳ್ಳಿಯನ್ನು ಧೂಳಿನಂತೆಯೂ ಚೊಕ್ಕ ಬಂಗಾರವನ್ನು ಬೀದಿಗಳ ಕೆಸರಿನಂತೆಯೂ ಕೂಡಿಸಿಕೊಂಡಿತು.
9:4b.ZEC.009.004 ಇಗೋ, ಕರ್ತನು ಅದನ್ನು ಹೊರಗೆ ಹಾಕುವನು; ಸಮುದ್ರದಲ್ಲಿ ಅದರ ಬಲವನ್ನು ಹೊಡೆಯುವನು; ಅದು ಬೆಂಕಿ ಯಿಂದ ದಹಿಸಲ್ಪಡುವದು.
9:5b.ZEC.009.005 ಅಷ್ಕಲೋನು ನೋಡಿ ಭಯಪಡುವದು; ಗಾಜ ಸಹ ಅದನ್ನು ನೋಡಿ ಬಹಳವಾಗಿ ವೇದನೆಪಡುವದು, ಎಕ್ರೋನು ಸಹ; ಅದರ ನಿರೀಕ್ಷೆಯು ಅದನ್ನು ನಾಚಿಕೆ ಪಡಿಸಿತು; ಗಾಜ ದೊಳಗಿಂದ ಅರಸನು ನಾಶವಾಗುವನು; ಅಷ್ಕೆಲೋನು ನಿವಾಸವಿಲ್ಲದೆ ಇರುವದು.
9:6b.ZEC.009.006 ಅಷ್ಡೋದಿನಲ್ಲಿ ಜಾರತ್ವ ದಿಂದ ಹುಟ್ಟಿದವನು ವಾಸವಾಗುತ್ತಾನೆ; ಫಿಲಿಷ್ಟಿಯರ ಗರ್ವವನ್ನು ನಾನು ತೆಗೆದುಬಿಡುವೆನು.
9:7b.ZEC.009.007 ಅವನ ರಕ್ತ ವನ್ನು ಅವನ ಬಾಯೊಳಗಿಂದಲೂ ಅವನ ಅಸಹ್ಯ ಗಳನ್ನು ಅವನ ಹಲ್ಲುಗಳ ನಡುವೆಯಿಂದಲೂ ನಾನು ತೆಗೆದುಹಾಕುವೆನು; ಅವನು ಸಹ ನಮ್ಮ ದೇವರಿಗಾಗಿ ಉಳಿಯುವನು; ಯೆಹೂದದಲ್ಲಿ ಪ್ರಭುವಿನ ಹಾಗೆ ಇರುವನು; ಎಕ್ರೋನು ಯೆಬೂಸಿಯನ ಹಾಗೆ ಇರು ವನು.
9:8b.ZEC.009.008 ಇದಲ್ಲದೆ ಹೋಗುತ್ತಾ ಬರುತ್ತಾ ಇರುವವನ ನಿಮಿತ್ತವೂ ಸೈನ್ಯದ ನಿಮಿತ್ತವೂ ನನ್ನ ಮನೆಯ ಹತ್ತಿರ ಪಾಳೆಯಮಾಡುತ್ತೇನೆ; ಇನ್ನು ಮೇಲೆ ಉಪದ್ರ ಕೊಡುವವನು ಅವರ ಮೇಲೆ ಹಾದು ಹೋಗುವದಿಲ್ಲ; ಯಾಕಂದರೆ ಈಗ ನನ್ನ ಕಣ್ಣುಗಳಿಂದ ನೋಡಿದ್ದೇನೆ.
9:9b.ZEC.009.009 ಚೀಯೋನ್ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.
9:10b.ZEC.009.010 ಇದಲ್ಲದೆ ಎಫ್ರಾಯಾಮಿನೊಳಗಿಂದ ರಥ ಗಳನ್ನೂ ಯೆರೂಸಲೇಮಿನೊಳಗಿಂದ ಕುದುರೆಗಳನ್ನೂ ತೆಗೆದುಬಿಡುವೆನು; ಯುದ್ಧದ ಬಿಲ್ಲು ಸಹ ತೆಗೆದು ಹಾಕಲ್ಪಡುವದು; ಆತನು ಅನ್ಯ ಜನಾಂಗಗಳಿಗೆ ಸಮಾ ಧಾನವನ್ನು ಹೇಳುವನು; ಆತನ ದೊರೆತನವು ಸಮುದ್ರ ದಿಂದ ಸಮುದ್ರಕ್ಕೂ ನದಿಯಿಂದ ಭೂಮಿಯ ಅಂತ್ಯಗಳ ವರೆಗೂ ಇರುವದು.
9:11b.ZEC.009.011 ನಿನ್ನ ವಿಷಯವಾಗಿ ಸಹ ನಿನ್ನ ಒಡಂಬಡಿಕೆಯ ರಕ್ತದಿಂದ, ನಿನ್ನ ಸೆರೆಯವರನ್ನು ನೀರಿಲ್ಲದ ಕುಣಿಯೊ ಳಗಿಂದ ಕಳುಹಿಸಿಬಿಡುತ್ತೇನೆ.
9:12b.ZEC.009.012 ನಿರೀಕ್ಷೆಯ ಸೆರೆಯವರೇ, ಬಲವಾದ ದುರ್ಗಸ್ಥಾನಕ್ಕೆ ತಿರಿಗಿರಿ, ಎರಡ ರಷ್ಟು ನಿಮಗೆ ಕೊಡುವೆನೆಂದು ಈ ಹೊತ್ತೇ ಪ್ರಕಟಿ ಸುತ್ತೇನೆ.
9:13b.ZEC.009.013 ಯೆಹೂದವನ್ನು ನನಗಾಗಿ ಬೊಗ್ಗಿಸಿದಾಗ ಎಫ್ರಾಯಾಮನ್ನು ಬಿಲ್ಲುಗಳಿಂದ ತುಂಬಿಸಿದ್ದೇನೆ; ಚೀಯೋನೇ, ನಿನ್ನ ಕುಮಾರರನ್ನು ಗ್ರೀಕ್ ಕುಮಾರರಿಗೆ ವಿರೋಧವಾಗಿ ಎಬ್ಬಿಸಿ ನಿನ್ನನ್ನು ಶೂರನ ಕತ್ತಿಯಂತೆ ಮಾಡಿದ್ದೇನೆ.
9:14b.ZEC.009.014 ಇದಲ್ಲದೆ ಕರ್ತನು ಅವರ ಮೇಲೆ ಕಾಣಿಸಿಕೊಳ್ಳುವನು; ಆತನ ಬಾಣಗಳು ಮಿಂಚಿನ ಹಾಗೆ ಹೊರಡುವವು; ಕರ್ತನಾದ ದೇವರು ತುತೂರಿ ಯನ್ನು ಊದಿ, ದಕ್ಷಿಣದ ಸುಳಿಗಾಳಿಯಲ್ಲಿ ಹೋಗು ವನು.
9:15b.ZEC.009.015 ಸೈನ್ಯಗಳ ಕರ್ತನು ಅವರನ್ನು ಕಾಪಾಡುವನು; ಅವರು ನುಂಗಿ ಕವಣೆ ಕಲ್ಲುಗಳನ್ನು ಸ್ವಾಧೀನಮಾಡಿ ಕೊಳ್ಳುವರು; ಕುಡಿದು ದ್ರಾಕ್ಷಾರಸದಿಂದಾದ ಹಾಗೆ ಓಲಾಡುವರು, ಪಾತ್ರೆಯ ಹಾಗೆಯೂ ಬಲಿಪೀಠದ ಮೂಲೆಗಳ ಹಾಗೆಯೂ ತುಂಬಿರುವರು.
9:16b.ZEC.009.016 ಇದಲ್ಲದೆ ಅವರ ದೇವರಾದ ಕರ್ತನು ಆ ದಿವಸದಲ್ಲಿ ಅವರನ್ನು ತನ್ನ ಜನರ ಮಂದೆಯ ಹಾಗೆ ರಕ್ಷಿಸುವನು; ಅವರು ಕಿರೀಟದ ಕಲ್ಲುಗಳಂತೆ ಆತನ ದೇಶದ ಮೇಲೆ ಧ್ವಜವಾಗಿ ಎತ್ತಲ್ಪಡುವರು.ಆತನ ಒಳ್ಳೇತನವು ಎಷ್ಟೋ ದೊಡ್ಡದು; ಆತನ ಸೌಂದರ್ಯವು ಎಷ್ಟು ಮಹತ್ತಾ ದದ್ದು! ಧಾನ್ಯವು ಯೌವನಸ್ಥರನ್ನೂ ದ್ರಾಕ್ಷಾರಸವು ಯುವತಿಯರನ್ನೂ ಹರ್ಷಗೊಳಿಸುವವು.
9:17b.ZEC.009.017 ಆತನ ಒಳ್ಳೇತನವು ಎಷ್ಟೋ ದೊಡ್ಡದು; ಆತನ ಸೌಂದರ್ಯವು ಎಷ್ಟು ಮಹತ್ತಾ ದದ್ದು! ಧಾನ್ಯವು ಯೌವನಸ್ಥರನ್ನೂ ದ್ರಾಕ್ಷಾರಸವು ಯುವತಿಯರನ್ನೂ ಹರ್ಷಗೊಳಿಸುವವು.
10
10:1b.ZEC.010.001 ಕರ್ತನಿಂದ ಹಿಂಗಾರುಮಳೆಯ ಕಾಲದಲ್ಲಿ ಮಳೆಗಾಗಿ ಬೇಡಿಕೊಳ್ಳಿರಿ. ಹೀಗೆ ಕರ್ತನು ಮಿಂಚುವ ಮೋಡಗಳನ್ನು ಮಾಡಿ ಅವರಿಗೆ ಜಡಿ ಮಳೆಯನ್ನೂ ಒಬ್ಬೊಬ್ಬನಿಗೆ ಹೊಲದಲ್ಲಿ ಹುಲ್ಲನ್ನೂ ಕೊಡುವನು.
10:2b.ZEC.010.002 ವಿಗ್ರಹಗಳು ವ್ಯರ್ಥವಾಗಿ ಮಾತ ನಾಡಿವೆ; ಶಕುನಗಾರರು ಸುಳ್ಳನ್ನು ನೋಡಿದ್ದಾರೆ; ಮೋಸವಾದ ಕನಸುಗಳನ್ನು ತಿಳಿಸಿದ್ದಾರೆ; ವ್ಯರ್ಥವಾಗಿ ಆದರಿಸುತ್ತಾರೆ; ಆದದರಿಂದ ಮಂದೆಯ ಹಾಗೆ ತಮ್ಮ ದಾರಿಯಲ್ಲಿ ಹೋಗಿದ್ದಾರೆ; ಕುರುಬನಿಲ್ಲದ ಕಾರಣ ಕಳವಳಗೊಂಡಿದ್ದಾರೆ.
10:3b.ZEC.010.003 ಕುರುಬರಿಗೆ ವಿರೋಧವಾಗಿ ನನ್ನ ಕೋಪವು ಉರಿಯಿತು; ಮೇಕೆಗಳನ್ನು ದಂಡಿಸಿದೆನು; ಸೈನ್ಯಗಳ ಕರ್ತನು ತನ್ನ ಮಂದೆಯಾಗಿರುವ ಯೆಹೂದನ ಮನೆ ತನದವರನ್ನು ದರ್ಶಿಸಿ ಅವರನ್ನು ಯುದ್ಧದಲ್ಲಿ ತನ್ನ ಘನವಾದ ಕುದುರೆಯ ಹಾಗೆ ಮಾಡಿದ್ದಾನೆ.
10:4b.ZEC.010.004 ಆತ ನಿಂದ ಮೂಲೆಗಲ್ಲೂ ಆತನಿಂದ ಮೊಳೆಯೂ ಆತನಿಂದ ಯುದ್ಧದ ಬಿಲ್ಲೂ ಆತನಿಂದ ಹಿಂಸಿಸುವವರೆಲ್ಲರೂ ಕೂಡಿಕೊಂಡು ಹೊರಡುತ್ತಾರೆ.
10:5b.ZEC.010.005 ಅವರು ಯುದ್ಧ ದಲ್ಲಿ ಶತ್ರುವನ್ನು ಬೀದಿಗಳ ಕೆಸರಿನಲ್ಲಿ ತುಳಿಯುವ ಶೂರರ ಹಾಗಿರುವರು; ಕರ್ತನು ಅವರ ಸಂಗಡ ಇರುವದರಿಂದ ಯುದ್ಧಮಾಡುವರು; ಕುದುರೆಗಳ ಮೇಲೆ ಸವಾರಿ ಮಾಡುವವರನ್ನು ನಾಚಿಕೆಪಡಿಸುವರು.
10:6b.ZEC.010.006 ಇದಲ್ಲದೆ ನಾನು ಯೆಹೂದನ ಮನೆತನದವರನ್ನು ಬಲಪಡಿಸುವೆನು, ಯೋಸೇಫನ ಮನೆತನದವರನ್ನು ರಕ್ಷಿಸುವೆನು; ಅವರನ್ನು ಕನಿಕರಿಸುವದರಿಂದ ತಿರಿಗಿ ತಂದು ನಿವಾಸಿಸ ಮಾಡುವೆನು; ನಾನು ಅವರನ್ನು ತಳ್ಳಿಬಿಡಲಿಲ್ಲವೋ ಎಂಬಂತೆ ಅವರು ಇರುವರು; ನಾನೇ ಅವರ ದೇವರಾದ ಕರ್ತನಾಗಿದ್ದು ಅವರಿಗೆ ಉತ್ತರಕೊಡುವೆನು.
10:7b.ZEC.010.007 ಎಫ್ರಾಯಾಮಿನವರು ಶೂರನಂತೆ ಇರುವರು; ಅವರ ಹೃದಯವು ದ್ರಾಕ್ಷಾರಸದಿಂದಾದ ಹಾಗೆ ಸಂತೋಷಪಡುವದು; ಹೌದು, ಅವರ ಮಕ್ಕಳು ನೋಡಿ ಸಂತೋಷಿಸುವರು; ಅವರ ಹೃದಯವು ಕರ್ತ ನಲ್ಲಿ ಉಲ್ಲಾಸಪಡುವದು.
10:8b.ZEC.010.008 ನಾನು ಅವರಿಗೆ ಸಿಳ್ಳುಹಾಕಿ ಅವರನ್ನು ಕೂಡಿಸುವೆನು; ಅವರನ್ನು ವಿಮೋಚಿ ಸಿದ್ದೇನೆ; ಅವರು ಹಿಂದೆ ಹೆಚ್ಚಿದ ಹಾಗೆ ಹೆಚ್ಚುವರು.
10:9b.ZEC.010.009 ನಾನು ಅವರನ್ನು ಜನಗಳಲ್ಲಿ ಬಿತ್ತುವೆನು; ದೂರ ದೇಶಗಳಲ್ಲಿ ಅವರು ನನ್ನನ್ನು ಜ್ಞಾಪಕಮಾಡುವರು; ತಮ್ಮ ಮಕ್ಕಳ ಸಂಗಡ ಬದುಕಿ ಮತ್ತೆ ತಿರುಗಿಕೊಳ್ಳುವರು.
10:10b.ZEC.010.010 ಐಗುಪ್ತದೇಶದೊಳಗಿಂದ ಸಹ ಅವರನ್ನು ತಿರಿಗಿ ತರುವೆನು; ಅಶ್ಯೂರಿನೊಳಗಿಂದ ಅವರನ್ನು ಕೂಡಿಸು ವೆನು; ಗಿಲ್ಯಾದಿನ ಮತ್ತು ಲೆಬನೋನಿನ ದೇಶಕ್ಕೆ ಅವರನ್ನು ತರುವೆನು; ಅವರಿಗೆ ಸ್ಥಳ ಸಾಲದೆ ಇರು ವದು.
10:11b.ZEC.010.011 ಅವನು ಸಮುದ್ರವನ್ನು ಬಾಧೆಯಿಂದ ದಾಟುವನು; ಸಮುದ್ರದಲ್ಲಿ ತೆರೆಗಳನ್ನು ಬಡಿಯು ವನು; ನದಿಯ ಅಗಾಧಗಳೆಲ್ಲಾ ಒಣಗುವವು; ಅಶ್ಯೂರಿನ ಗರ್ವವು ತಗ್ಗಿಸಲ್ಪಡುವದು; ಐಗುಪ್ತದ ಮುದ್ರೆಕೋಲು ಹೋಗಿಬಿಡುವದು.ಕರ್ತನಲ್ಲಿ ನಾನು ಅವರನ್ನು ಬಲಪಡಿಸುವೆನು; ಆತನ ಹೆಸರಿನಲ್ಲಿ ಅವರು ಮೇಲೆ ಕೆಳಗೆ ನಡೆಯುವರು ಎಂದು ಕರ್ತನು ಅನ್ನುತ್ತಾನೆ.
10:12b.ZEC.010.012 ಕರ್ತನಲ್ಲಿ ನಾನು ಅವರನ್ನು ಬಲಪಡಿಸುವೆನು; ಆತನ ಹೆಸರಿನಲ್ಲಿ ಅವರು ಮೇಲೆ ಕೆಳಗೆ ನಡೆಯುವರು ಎಂದು ಕರ್ತನು ಅನ್ನುತ್ತಾನೆ.
11
11:1b.ZEC.011.001 ಓ ಲೆಬನೋನೇ, ಬೆಂಕಿ ನಿನ್ನ ದೇವದಾರುಗಳನ್ನು ನುಂಗುವ ಹಾಗೆ ನಿನ್ನ ಬಾಗಲು ಗಳನ್ನು ತೆರೆ.
11:2b.ZEC.011.002 ತುರಾಯಿ ಗಿಡವೇ, ಗೋಳಿಡು; ದೇವದಾರು ಬಿದ್ದುಹೋಯಿತು, ಬಲವಾದವುಗಳು ಹಾಳಾದವು; ಬಾಷಾನಿನ ಓಕ್ ಮರಗಳೇ, ಗೋಳಾ ಡಿರಿ; ದ್ರಾಕ್ಷೆಯ ಅಡವಿಯು ಇಳಿದು ಬಂದಿದೆ.
11:3b.ZEC.011.003 ಕುರುಬರು ಗೋಳಿಡುವ ಶಬ್ದವುಂಟು; ಅವರ ಗೌರವವು ಕೆಡಿಸಲ್ಪಟ್ಟಿದೆ, ಪ್ರಾಯದ ಸಿಂಹಗಳ ಘರ್ಜಿಸುವ ಶಬ್ದವುಂಟು; ಯೊರ್ದನಿನ ಗರ್ವ ಕೆಡಿಸಲ್ಪಟ್ಟಿದೆ.
11:4b.ZEC.011.004 ನನ್ನ ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಕೊಲೆಯ ಮಂದೆಯನ್ನು ಮೇಯಿಸು.
11:5b.ZEC.011.005 ಅವುಗಳನ್ನು ಸಂಪಾದಿಸಿದವರು ಅವುಗಳನ್ನು ಕೊಂದು ತಮ್ಮನ್ನು ನಿರಪರಾಧಿಗಳೆಂದೆಣಿಸುತ್ತಾರೆ; ಅವುಗಳನ್ನು ಮಾರುವ ವರು--ನಾನು ಐಶ್ವರ್ಯವಂತನಾದೆನು, ಕರ್ತನಿಗೆ ಸ್ತೋತ್ರ ಎಂದನ್ನುತ್ತಾರೆ; ಅವರ ಸ್ವಂತ ಕುರುಬರು ಅವುಗಳನ್ನು ಕನಿಕರಿಸುವದಿಲ್ಲ.
11:6b.ZEC.011.006 ನಾನು ದೇಶದ ನಿವಾಸಿಗಳನ್ನು ಇನ್ನು ಕನಿಕರಿಸುವದೇ ಇಲ್ಲ ಎಂದು ಕರ್ತನು ಅನ್ನುತ್ತಾನೆ; ಆದರೆ ಇಗೋ, ನಾನು ಒಬ್ಬೊ ಬ್ಬನನ್ನು ತನ್ನ ತನ್ನ ನೆರೆಯವನ ಕೈಗೂ ತನ್ನ ಅರಸನ ಕೈಗೂ ಒಪ್ಪಿಸುವೆನು; ಅವರು ದೇಶವನ್ನು ಹೊಡೆ ಯುವರು; ಅವರ ಕೈಯೊಳಗಿಂದ ನಾನು ಅವರನ್ನು ತಪ್ಪಿಸುವದಿಲ್ಲ.
11:7b.ZEC.011.007 ಆಗ ಕೊಯ್ಗುರಿಗಳ ಮಂದೆ ಯನ್ನು ಹೌದು, ಬಡವಾದ ಮಂದೆಯನ್ನೇ ಮೇಯಿಸಿದೆನು; ನನಗಾಗಿ ಎರಡು ಕೋಲುಗಳನ್ನು ತಕ್ಕೊಂಡೆನು; ಒಂದಕ್ಕೆ ಸೌಂದರ್ಯ ಎಂದೂ ಮತ್ತೊಂದಕ್ಕೆ ಬಂಧ ಗಳೆಂದೂ ಹೆಸರಿಟ್ಟೆನು; ಹೀಗೆ ಮಂದೆಯನ್ನು ಮೇಯಿ ಸಿದೆನು.
11:8b.ZEC.011.008 ಇದಲ್ಲದೆ ಒಂದೇ ತಿಂಗಳಲ್ಲಿ ಮೂರು ಕುರುಬರನ್ನು ತೆಗೆದುಹಾಕಿದೆನು; ನನ್ನ ಆತ್ಮವು ಅವರನ್ನು ಹೇಸಿಕೊಂಡಿತು; ಅವರ ಆತ್ಮವು ಸಹ ನನ್ನನ್ನು ಹೇಸಿ ಕೊಂಡಿತು.
11:9b.ZEC.011.009 ಆಗ ನಾನು ಹೇಳಿದ್ದೇನಂದರೆ-- ನಾನು ನಿಮ್ಮನ್ನು ಮೇಯಿಸುವದಿಲ್ಲ; ಸಾಯುವಂಥದ್ದು ಸಾಯಲಿ; ಕೆಡುವಂಥದ್ದು ಕೆಡಲಿ; ಮಿಕ್ಕಾದವುಗಳ ಒಂದರ ಮಾಂಸವನ್ನು ಒಂದು ತಿನ್ನಲಿ.
11:10b.ZEC.011.010 ಆಗ ಸೌಂದರ್ಯವೆಂಬ ನನ್ನ ಕೋಲನ್ನು ತಕ್ಕೊಂಡು ಅದನ್ನು ಮುರಿದುಬಿಟ್ಟೆನು; ಹೀಗೆ ಜನರೆಲ್ಲರ ಸಂಗಡ ನಾನು ಮಾಡಿದ್ದ ನನ್ನ ಒಡಂಬಡಿಕೆಯನ್ನು ಮುರಿದುಬಿಟ್ಟೆನು,
11:11b.ZEC.011.011 ಅದೇ ದಿನದಲ್ಲಿ ಅದು ಮುರಿಯಲ್ಪಟ್ಟಿತು; ಆಗ ನನ್ನಲ್ಲಿ ನಿರೀಕ್ಷೆಯಿಟ್ಟ ಬಡ ಕುರಿಮಂದೆಯು ಅದು ಕರ್ತನ ವಾಕ್ಯವೆಂದು ತಿಳಿದುಕೊಂಡಿತು.
11:12b.ZEC.011.012 ಆಗ ನಾನು ಅವರಿಗೆ--ನಿಮ್ಮ ಕಣ್ಣುಗಳಲ್ಲಿ ಒಳ್ಳೇದಾಗಿ ತೋರಿದರೆ ನನ್ನ ಸಂಬಳವನ್ನು ಕೊಡಿರಿ, ಇಲ್ಲದಿದ್ದರೆ ಬಿಡಿರಿ ಅಂದೆನು. ಆಗ ಅವರು ನನ್ನ ಸಂಬಳಕ್ಕಾಗಿ ಮೂವತ್ತು ರೂಪಾಯಿಗಳನ್ನು ತೂಕಮಾಡಿದರು.
11:13b.ZEC.011.013 ಆಗ ಕರ್ತನು ನನಗೆ--ಅದನ್ನು ಕುಂಬಾರನಿಗೆ ಹಾಕು; ನಾನು ಅವರಿಂದ ಬೆಲೆ ಮಾಡಲ್ಪಟ್ಟದ್ದು ಸರಿಯಾದ ಬೆಲೆ ಅಲ್ಲವೋ ಅಂದನು; ಆಗ ನಾನು ಆ ಮೂವತ್ತು ರೂಪಾಯಿಗಳನ್ನು ತಕ್ಕೊಂಡು ಕರ್ತನ ಆಲಯದಲ್ಲಿ ಅವುಗಳನ್ನು ಕುಂಬಾರನಿಗೆ ಹಾಕಿದೆನು.
11:14b.ZEC.011.014 ಆಗ ನನ್ನ ಎರಡನೇ ಕೋಲಾದ ಬಂಧಗಳನ್ನು ಮುರಿದುಬಿಟ್ಟೆನು; ಹೀಗೆ ಯೆಹೂದಕ್ಕೂ ಇಸ್ರಾಯೇ ಲಿಗೂ ಮಧ್ಯೆ ಇರುವ ಸಹೋದರತನವನ್ನು ಇಲ್ಲದ ಹಾಗೆ ಮಾಡಿದೆನು.
11:15b.ZEC.011.015 ಇದಲ್ಲದೆ ಕರ್ತನು ನನಗೆ ಹೇಳಿದ್ದೇನಂದರೆ --ಇನ್ನು ಬುದ್ಧಿಹೀನವಾದ ಕುರುಬನ ಆಯುಧಗ ಳನ್ನು ತಕ್ಕೋ.
11:16b.ZEC.011.016 ಇಗೋ, ನಾನು ದೇಶದಲ್ಲಿ ಒಬ್ಬ ಕುರುಬನನ್ನು ಎಬ್ಬಿಸುವೆನು; ಅವನು ಕೆಟ್ಟು ಹೋಗುವ ವುಗಳನ್ನು ವಿಚಾರಿಸುವದಿಲ್ಲ; ಇಲ್ಲವೆ ಮರಿಯನ್ನು ಅವನು ಹುಡುಕುವದಿಲ್ಲ; ಮುರಿದದ್ದನ್ನು ಅವನು ಗುಣಮಾಡುವದಿಲ್ಲ; ಇನ್ನೂ ನಿಂತಿರುವದನ್ನು ಅವನು ಪೋಷಿಸುವದಿಲ್ಲ; ಆದರೆ ಕೊಬ್ಬಿದವುಗಳ ಮಾಂಸ ವನ್ನು ತಿನ್ನುವನು; ಅವುಗಳ ಗೊರಸುಗಳನ್ನು ಮುರಿದು ಬಿಡುವನು.ಮಂದೆಯನ್ನು ಕೈಬಿಡುವಂಥ ಮೈಗಳ್ಳನಾದ ಕುರುಬನಿಗೆ ಅಯ್ಯೋ! ಕತ್ತಿಯು ಅವನ ತೋಳಿನ ಮೇಲೆಯೂ ಅವನ ಬಲಗಣ್ಣಿನ ಮೇಲೆಯೂ ಇರುವದು; ಅವನ ತೋಳು ತೀರಾ ಒಣಗುವದು; ಅವನ ಬಲಗಣ್ಣು ಪೂರ್ಣವಾಗಿ ಕತ್ತಲಾಗುವದು.
11:17b.ZEC.011.017 ಮಂದೆಯನ್ನು ಕೈಬಿಡುವಂಥ ಮೈಗಳ್ಳನಾದ ಕುರುಬನಿಗೆ ಅಯ್ಯೋ! ಕತ್ತಿಯು ಅವನ ತೋಳಿನ ಮೇಲೆಯೂ ಅವನ ಬಲಗಣ್ಣಿನ ಮೇಲೆಯೂ ಇರುವದು; ಅವನ ತೋಳು ತೀರಾ ಒಣಗುವದು; ಅವನ ಬಲಗಣ್ಣು ಪೂರ್ಣವಾಗಿ ಕತ್ತಲಾಗುವದು.
12
12:1b.ZEC.012.001 ಇಸ್ರಾಯೇಲಿನ ವಿಷಯವಾದ ಕರ್ತನ ವಾಕ್ಯದ ಭಾರವು ಆಕಾಶವನ್ನು ಹರಡಿಸು ವಾತನೂ ಭೂಮಿಯ ಅಸ್ತಿವಾರವನ್ನು ಹಾಕುವಾತನೂ ಮನುಷ್ಯನ ಆತ್ಮವನ್ನು ಅವನೊಳಗೆ ರೂಪಿಸುವಾತನೂ ಆದ ಕರ್ತನು ಹೇಳುವದೇನಂದರೆ--
12:2b.ZEC.012.002 ಇಗೋ, ನಾನು ಯೆರೂಸಲೇಮನ್ನು ಸುತ್ತಲಿರುವ ಎಲ್ಲಾ ಜನರಿಗೆ ನಡುಗುವ ಪಾತ್ರೆಯಾಗಿ ಮಾಡುತ್ತೇನೆ; ಯೆರೂಸಲೇ ಮಿಗೂ ಯೆಹೂದಕ್ಕೂ ವಿರೋಧವಾಗಿ ಮುತ್ತಿಗೆ ಹಾಕುವ
12:3b.ZEC.012.003 ಆ ದಿನದಲ್ಲಿ ನಾನು ಯೆರೂಸಲೇಮನ್ನು ಎಲ್ಲಾ ಜನರಿಗೆ ಭಾರವಾದ ಕಲ್ಲಾಗಿ ಮಾಡುತ್ತೇನೆ; ಅದನ್ನು ಎತ್ತುವವರೆಲ್ಲರು ಜಜ್ಜಲ್ಪಡುವರು; ಆದರೆ ಅದಕ್ಕೆ ವಿರೋಧವಾಗಿ ಭೂಮಿಯ ಜನಾಂಗಗಳೆಲ್ಲಾ ಒಟ್ಟುಗೂಡಿಕೊಳ್ಳುವವು.
12:4b.ZEC.012.004 ಆ ದಿನದಲ್ಲಿ ಕರ್ತನು--ನಾನು ಕುದುರೆಗಳನ್ನೆಲ್ಲಾ ಬೆದರಿಕೆಯಿಂದಲೂ ಹತ್ತಿ ದವನನ್ನು ಹುಚ್ಚುತನದಿಂದಲೂ ಹೊಡೆಯುವೆನು; ಯೆಹೂದನ ಮನೆಯ ಮೇಲೆ ನನ್ನ ಕಣ್ಣುಗಳನ್ನು ತೆರೆಯುವೆನು; ಜನಗಳ ಕುದುರೆಗಳನ್ನೆಲ್ಲಾ ಕುರುಡುತನ ದಿಂದ ಹೊಡೆಯುವೆನು.
12:5b.ZEC.012.005 ಆಗ ಯೆಹೂದದ ದೊರೆ ಗಳು ತಮ್ಮ ಹೃದಯದಲ್ಲಿ--ಯೆರೂಸಲೇಮಿನ ನಿವಾಸಿ ಗಳು ಅವರ ದೇವರಾದ ಸೈನ್ಯಗಳ ಕರ್ತನಲ್ಲಿ ನಮಗೆ ಬಲವಾಗಿದ್ದಾರೆಂದು ಅವರು ಅಂದುಕೊಳ್ಳುವರು.
12:6b.ZEC.012.006 ಆ ದಿನದಲ್ಲಿ ನಾನು ಯೆಹೂದದ ದೊರೆಗಳನ್ನು ಕಟ್ಟಿಗೆಯ ಮಧ್ಯದಲ್ಲಿರುವ ಬೆಂಕಿಯ ಒಲೆಯ ಹಾಗೆಯೂ ಸಿವುಡುಗಳಲ್ಲಿರುವ ಬೆಂಕಿಯ ಕೊಳ್ಳಿಯ ಹಾಗೆಯೂ ಮಾಡುವೆನು. ಅವರು ಬಲಗಡೆಯಲ್ಲಿಯೂ ಎಡಗಡೆ ಯಲ್ಲಿಯೂ ಸುತ್ತಲಿರುವ ಎಲ್ಲಾ ಜನಗಳನ್ನು ನುಂಗಿ ಬಿಡುವರು; ಯೆರೂಸಲೇಮು ತಿರುಗಿ ತನ್ನ ಸ್ಥಳದಲ್ಲಿ, ಯೆರೂಸಲೇಮಿನಲ್ಲಿಯೇ ವಾಸಿಸುವದು.
12:7b.ZEC.012.007 ಇದಲ್ಲದೆ ದಾವೀದನ ಮನೆಯ ಘನತೆಯೂ ಯೆರೂಸಲೇಮಿನ ನಿವಾಸಿಗಳ ಗೌರವವೂ ಯೆಹೂದಕ್ಕೆ ವಿರೋಧವಾಗಿ ಹೆಚ್ಚಳ ಪಡದ ಹಾಗೆ ಕರ್ತನು ಮೊದಲು ಯೆಹೂದದ ಗುಡಾರಗಳನ್ನು ರಕ್ಷಿಸುವನು.
12:8b.ZEC.012.008 ಆ ದಿನದಲ್ಲಿ ಕರ್ತನು ಯೆರೂಸಲೇಮಿನ ನಿವಾಸಿಗಳನ್ನು ಕಾಪಾಡುವನು; ಆ ದಿನದಲ್ಲಿ ಅವರೊಳಗೆ ಬಲಹೀನನು ದಾವೀದನ ಹಾಗೆಯೂ ದಾವೀದನ ಮನೆತನದವರು ದೇವರ ಹಾಗೆಯೂ ಅಂದರೆ ಅವರ ಮುಂದೆ ಕರ್ತನ ದೂತನ ಹಾಗೆಯೂ ಇರುವರು.
12:9b.ZEC.012.009 ಆ ದಿನದಲ್ಲಿ ಆಗುವದೇ ನಂದರೆ, ಯೆರೂಸಲೇಮಿಗೆ ವಿರೋಧವಾಗಿ ಬರುವ ಜನಾಂಗಗಳನ್ನೆಲ್ಲಾ ನಾಶ ಮಾಡುವದಕ್ಕೆ ನಾನು ಹುಡುಕುವೆನು.
12:10b.ZEC.012.010 ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.
12:11b.ZEC.012.011 ಮೆಗಿದ್ದೋವಿನ ತಗ್ಗಿನಲ್ಲಾದ ಹದದ್ ರಿಮ್ಮೊನಿನ ಗೋಳಾಟದ ಹಾಗೆ ಆ ದಿನ ದಲ್ಲಿ ಯೆರೂಸಲೇಮಿನೊಳಗೆ ಮಹಾಗೋಳಾಟವಿ ರುವದು.
12:12b.ZEC.012.012 ದೇಶವು ಗೋತ್ರ ಗೋತ್ರಗಳ ಪ್ರಕಾರ ಪ್ರತ್ಯೇಕವಾಗಿ ಗೋಳಾಡುವದು; ದಾವೀದನ ಮನೆಯ ಗೋತ್ರವು ಪ್ರತ್ಯೇಕ ಅವರ ಹೆಂಡತಿಯರು ಪ್ರತ್ಯೇಕ; ನಾತಾನನ ಮನೆತನದ ಗೋತ್ರವು ಪ್ರತ್ಯೇಕ, ಅವರ ಹೆಂಡತಿಯರು ಪ್ರತ್ಯೇಕ.
12:13b.ZEC.012.013 ಲೇವಿಯರ ಮನೆತ ನದ ಗೋತ್ರವು ಪ್ರತ್ಯೇಕ, ಅವರ ಹೆಂಡತಿಯರು ಪ್ರತ್ಯೇಕ; ಶಿಮ್ಮಿಯನ ಗೋತ್ರವು ಪ್ರತ್ಯೇಕ, ಅವರ ಹೆಂಡತಿ ಯರು ಪ್ರತ್ಯೇಕ.ಉಳಿದ ಗೋತ್ರಗ ಳೆಲ್ಲಾ ಗೋತ್ರ ಗೋತ್ರಗಳ ಪ್ರಕಾರ ಪ್ರತ್ಯೇಕವಾ ಗಿಯೂ ಅವರ ಹೆಂಡತಿಯರು ಪ್ರತ್ಯೇಕವಾಗಿಯೂ ಗೋಳಾಡುವರು.
12:14b.ZEC.012.014 ಉಳಿದ ಗೋತ್ರಗ ಳೆಲ್ಲಾ ಗೋತ್ರ ಗೋತ್ರಗಳ ಪ್ರಕಾರ ಪ್ರತ್ಯೇಕವಾ ಗಿಯೂ ಅವರ ಹೆಂಡತಿಯರು ಪ್ರತ್ಯೇಕವಾಗಿಯೂ ಗೋಳಾಡುವರು.
13
13:1b.ZEC.013.001 ಆ ದಿನದಲ್ಲಿ ದಾವೀದನ ಮನೆತನದ ವರಿಗೂ ಯೆರೂಸಲೇಮಿನ ನಿವಾಸಿಗ ಳಿಗೂ ಪಾಪದ ನಿಮಿತ್ತ ಮತ್ತು ಅಶುದ್ಧತ್ವದ ನಿಮಿತ್ತ ಬುಗ್ಗೆ ತೆರೆಯಲ್ಪಡುವದು.
13:2b.ZEC.013.002 ಸೈನ್ಯಗಳ ಕರ್ತನು--ಆ ದಿನದಲ್ಲಿ ಆಗುವದೇನಂದರೆ, ನಾನು ವಿಗ್ರಹಗಳ ಹೆಸರುಗಳನ್ನು ದೇಶದೊಳಗಿಂದ ಕಡಿದುಬಿಡುವೆನು; ಅವು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲ; ಪ್ರವಾದಿಗಳನ್ನೂ ಅಶುದ್ಧ ಆತ್ಮವನ್ನೂ ದೇಶದೊಳಗಿಂದ ತೊಲಗಿ ಹೋಗುವಂತೆ ಮಾಡುವೆನು ಎಂದು ಅನ್ನುತ್ತಾನೆ.
13:3b.ZEC.013.003 ಆಗುವದೇನಂದರೆ, ಯಾವನಾದರೂ ಇನ್ನು ಪ್ರವಾದಿ ಸಿದರೆ ಅವನ ಹೆತ್ತವರಾದ ತಂದೆತಾಯಿಗಳು ಅವ ನಿಗೆ--ನೀನು ಬದುಕಬಾರದು, ಕರ್ತನ ಹೆಸರಿನಲ್ಲಿ ಸುಳ್ಳು ಹೇಳುತ್ತೀ ಎಂದು ಹೇಳುವರು; ಅವನು ಪ್ರವಾದಿಸುವಾಗ ಅವನ ಹೆತ್ತವರಾದ ತಂದೆತಾಯಿ ಗಳು ಅವನನ್ನು ನೂಕಿಬಿಡುವರು.
13:4b.ZEC.013.004 ಆ ದಿವಸದಲ್ಲಿ ಆಗುವದೇನಂದರೆ, ಪ್ರವಾದಿಗಳು ಪ್ರವಾದಿಸುವಾಗ ಅವರು ತಮ್ಮ ತಮ್ಮ ದರ್ಶನಗಳಿಗೆ ನಾಚಿಕೆಪಡುವರು; ವಂಚಿಸುವ ಹಾಗೆ ಒರಟಾದ ವಸ್ತ್ರವನ್ನು ಹಾಕಿಕೊಳ್ಳರು.
13:5b.ZEC.013.005 ಆದರೆ ಅವರು--ನಾನು ಪ್ರವಾದಿಯಲ್ಲ, ನಾನು ಭೂಮಿಯಲ್ಲಿ ವ್ಯವಸಾಯಮಾಡುವವನು; ಒಬ್ಬನು ನನ್ನನ್ನು ಚಿಕ್ಕತನದಿಂದ ದನಗಳನ್ನು ಕಾಯುವದಕ್ಕೆ ಕಲಿಸಿದನು ಅನ್ನುವನು.
13:6b.ZEC.013.006 ಆಗ ಒಬ್ಬನು ಅವನಿಗೆ--ನಿನ್ನ ಕೈಗಳಲ್ಲಿರುವ ಈ ಗಾಯಗಳು ಏನು ಎಂದು ಹೇಳುವನು. ಆಗ ಅವನು--ನನ್ನ ಸ್ನೇಹಿತರ ಮನೆಯಲ್ಲಿ ನನಗುಂಟಾದ ಗಾಯಗಳೇ ಅನ್ನುವನು.
13:7b.ZEC.013.007 ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.
13:8b.ZEC.013.008 ಕರ್ತನು--ಇದಲ್ಲದೆ ಸಮಸ್ತ ದೇಶದಲ್ಲಿ ಆಗುವದೇನಂದರೆ-- ಅದರಲ್ಲಿ ಎರಡು ಪಾಲು ಕಡಿಯಲ್ಪಟ್ಟು ಸಾಯುವದು; ಆದರೆ ಮೂರನೇ ಪಾಲು ಅದರಲ್ಲಿ ಬಿಡಲ್ಪಡುವದು.ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
13:9b.ZEC.013.009 ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
14
14:1b.ZEC.014.001 ಇಗೋ, ಕರ್ತನ ದಿನವು ಬರುತ್ತದೆ.
14:2b.ZEC.014.002 ಆಗ ನಿನ್ನ ಕೊಳ್ಳೆಯು ನಿನ್ನ ಮಧ್ಯದಲ್ಲಿ ವಿಭಾಗಿಸ ಲ್ಪಡುವದು; ನಾನು ಜನಾಂಗಗಳನ್ನೆಲ್ಲಾ ಯೆರೂಸ ಲೇಮಿಗೆ ವಿರೋಧವಾಗಿ ಯುದ್ಧಕ್ಕೆ ಕೂಡಿಸುವೆನು; ಪಟ್ಟಣವು ಹಿಡಿಯಲ್ಪಡುವದು; ಮನೆಗಳು ಸುಲು ಕೊಳ್ಳಲ್ಪಡುವವು, ಹೆಂಗಸರು ಕೆಡಿಸಲ್ಪಡುವರು, ಪಟ್ಟಣದ ಅರವಾಸಿ ಜನರು ಸೆರೆಗೆ ಹೋಗುವರು; ಆದರೆ ಉಳಿದ ಜನರೆಲ್ಲರು ಪಟ್ಟಣದೊಳಗಿಂದ ತೆಗೆದುಬಿಡಲ್ಪಡುವದಿಲ್ಲ.
14:3b.ZEC.014.003 ಆಗ ಕರ್ತನು ಹೊರಟು ಯುದ್ಧದ ದಿನದಲ್ಲಿ ಕಾದಾಟಮಾಡಿದ ಪ್ರಕಾರವೇ ಆ ಜನಾಂಗಗಳ ಸಂಗಡ ಆತನು ಕಾದಾಟ ಮಾಡುವನು.
14:4b.ZEC.014.004 ಆ ದಿನದಲ್ಲಿ ಆತನ ಪಾದಗಳು ಯೆರೂಸಲೇಮಿನ ಮುಂದೆ ಪೂರ್ವ ದಿಕ್ಕಿನಲ್ಲಿರುವ ಎಣ್ಣೇ ಮರದ ಗುಡ್ಡದ ಮೇಲೆ ನಿಲ್ಲುವವು; ಎಣ್ಣೇ ಮರದ ಗುಡ್ಡವು ಅದರ ನಡುವೆಯಿಂದ ಪೂರ್ವಕ್ಕೂ ಪಶ್ಚಿಮಕ್ಕೂ ಸೀಳಿ ಬಹುದೊಡ್ಡ ತಗ್ಗಾಗುವದು; ಅರ್ಧ ಗುಡ್ಡವು ಉತ್ತರಕ್ಕೂ ಅರ್ಧ ದಕ್ಷಿಣಕ್ಕೂ ಸರಿದು ಕೊಳ್ಳುವದು.
14:5b.ZEC.014.005 ನೀವು ಬೆಟ್ಟಗಳ ತಗ್ಗಿಗೆ ಓಡಿಹೋಗು ವಿರಿ; ಬೆಟ್ಟಗಳ ತಗ್ಗು ಆಚೆಲಿಗೆ ಮುಟ್ಟುವದು. ಹೌದು, ಯೆಹೂದದ ಅರಸನಾದ ಉಜ್ಜೀಯನ ದಿವಸಗಳಲ್ಲಿ ನೀವು ಭೂಕಂಪಕ್ಕೆ ಓಡಿಹೋದ ಹಾಗೆ ಓಡಿಹೋಗು ವಿರಿ; ನನ್ನ ದೇವರಾದ ಕರ್ತನು ತನ್ನ ಪರಿಶುದ್ಧರೆ ಲ್ಲರ ಸಂಗಡ ಬರುವನು.
14:6b.ZEC.014.006 ಆ ದಿನದಲ್ಲಿ ಆಗುವದೇ ನಂದರೆ--ಬೆಳಕು ಇಲ್ಲವೆ ಕತ್ತಲೆಯು ಸ್ಪಷ್ಟವಾಗಿರದು.
14:7b.ZEC.014.007 ಆದರೆ ಕರ್ತನಿಗೆ ತಿಳಿದಿರುವ ಒಂದು ದಿನ ಇರುವದು, ಅದು ಹಗಲೂ ಅಲ್ಲ, ರಾತ್ರಿಯೂ ಅಲ್ಲ; ಆದರೆ ಸಾಯಂಕಾಲದ ಸಮಯದಲ್ಲಿ ಬೆಳಕು ಇರುವದು.
14:8b.ZEC.014.008 ಆ ದಿನದಲ್ಲಿ ಆಗುವದೇನಂದರೆ, ಯೆರೂಸಲೇಮಿ ನೊಳಗಿದ್ದ ಜೀವಜಲಗಳು ಹೊರಡುವವು; ಅವುಗ ಳಲ್ಲಿ ಅರ್ಧ ಪೂರ್ವ ಸಮುದ್ರಕ್ಕೆ ಅರ್ಧ ಪಶ್ಚಿಮ ಸಮುದ್ರಕ್ಕೆ ಹೋಗುವವು; ಅದು ಬೇಸಿಗೆ ಕಾಲ ದಲ್ಲಿಯೂ ಚಳಿಗಾಲದಲ್ಲಿಯೂ ಇರುವದು.
14:9b.ZEC.014.009 ಕರ್ತನು ಭೂಮಿಗೆಲ್ಲಾ ಅರಸನಾಗಿರುವನು; ಆ ದಿನದಲ್ಲಿ ಕರ್ತನು ಒಬ್ಬನೇ ಇರುವನು; ಆತನ ಹೆಸರು ಒಂದೇ.
14:10b.ZEC.014.010 ದೇಶವೆಲ್ಲಾ ಗೆಬ ಮೊದಲುಗೊಂಡು ಯೆರೂಸ ಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನ ವರೆಗೂ ಬೈಲಿನ ಹಾಗೆ ಮಾರ್ಪಡುವದು; ಅದು ಎತ್ತಲ್ಪಟ್ಟು ತನ್ನ ಸ್ಥಳ ದಲ್ಲಿ ಬೆನ್ಯಾವಿಾನನ ಬಾಗಲು ಮೊದಲುಗೊಂಡು ಮೊದಲನೇ ಬಾಗಲಿನ ಸ್ಥಳದ ವರೆಗೂ ಮೂಲೆ ಬಾಗಲಿನ ವರೆಗೂ ಹನನೇಲನ ಗೋಪುರ ಮೊದಲು ಗೊಂಡು ಅರಸನ ದ್ರಾಕ್ಷೇ ಅಲೆಗಳ ವರೆಗೂ ನಿವಾಸ ವಾಗುವದು.
14:11b.ZEC.014.011 ಅದರಲ್ಲಿ ಜನರು ವಾಸವಾಗಿರುವರು; ಅಲ್ಲಿ ಇನ್ನು ಮೇಲೆ ಸಂಪೂರ್ಣವಾದ ನಾಶವಿರದು; ಆದರೆ ಯೆರೂಸಲೇಮು ಭದ್ರವಾಗಿ ವಾಸಿಸುವದು.
14:12b.ZEC.014.012 ಯೆರೂಸಲೇಮಿಗೆ ವಿರೋಧವಾಗಿ ದಂಡುಕಟ್ಟಿ ಕೊಂಡಿರುವ ಎಲ್ಲಾ ಜನಗಳನ್ನು ಕರ್ತನು ವ್ಯಾಧಿ ಯಿಂದ ಬಾಧಿಸುವನು; ಹೀಗೆಯೇ ಅವರು ಕಾಲಿನ ಮೇಲೆ ನಿಲ್ಲುವಾಗ ಅವರ ಶರೀರವು ಕ್ಷಯಿಸಿಹೋಗು ವದು; ಅವರ ಕಣ್ಣುಗಳು ಗುಣಿಗಳಲ್ಲಿ ಇಂಗಿಹೋಗು ವವು; ಅವರ ನಾಲಿಗೆ ಅವರ ಬಾಯಲ್ಲಿ ಕ್ಷಯಿಸಿ ಹೋಗುವದು.
14:13b.ZEC.014.013 ಆ ದಿನದಲ್ಲಿ ಆಗುವದೇನಂದರೆ --ಕರ್ತನಿಂದಾದ ದೊಡ್ಡ ಕೋಲಾಹಲ ಅವರಲ್ಲಿ ಇರುವದು; ಆಗ ಒಬ್ಬೊಬ್ಬನು ತನ್ನ ತನ್ನ ನೆರೆಯವನ ಕೈಯನ್ನು ಹಿಡಿಯುವನು ಮತ್ತು ಅವನ ಕೈ ತನ್ನ ನೆರೆಯವನ ಮೇಲೆ ಎತ್ತಲ್ಪಡುವದು.
14:14b.ZEC.014.014 ಯೆಹೂದವು ಸಹ ಯೆರೂಸಲೇಮಿನಲ್ಲಿ ಯುದ್ಧ ಮಾಡುವದು; ಸುತ್ತಲಿರುವ ಎಲ್ಲಾ ಅನ್ಯ ಜನಾಂಗಗಳ ಸಂಪತ್ತಾಗಿ ರುವ, ಚಿನ್ನ, ಬೆಳ್ಳಿ, ವಸ್ತ್ರಗಳು ಬಹು ಹೇರಳವಾಗಿ ಕೂಡಿಸಲ್ಪಡುವವು.
14:15b.ZEC.014.015 ಆ ಗುಡಾರಗಳಲ್ಲಿರುವ ಕುದುರೆ, ಹೇಸರಕತ್ತೆ, ಒಂಟೆ, ಕತ್ತೆ ಮೊದಲಾದ ಎಲ್ಲಾ ಪಶುಗಳ ಬಾಧೆಯು ಈ ಬಾಧೆಯ ಹಾಗೆಯೇ ಇರುವದು.
14:16b.ZEC.014.016 ಆಗುವದೇನಂದರೆ--ಯೆರೂಸಲೇಮಿಗೆ ವಿರೋಧವಾಗಿ ಬಂದ ಎಲ್ಲಾ ಜನಾಂಗ ಗಳಲ್ಲಿ ಉಳಿದವರೆಲ್ಲಾ ವರುಷ ವರುಷಕ್ಕೆ ಸೈನ್ಯಗಳ ಕರ್ತನಾದ ಅರಸನನ್ನು ಆರಾಧಿಸುವದಕ್ಕೂ ಗುಡಾ ರಗಳ ಹಬ್ಬವನ್ನು ಆಚರಿಸುವದಕ್ಕೂ ಹೋಗುವರು.
14:17b.ZEC.014.017 ಆಗುವದೇನಂದರೆ, ಭೂಮಿಯ ಗೋತ್ರಗಳಲ್ಲಿ ಸೈನ್ಯಗಳ ಕರ್ತನಾದ ಅರಸನನ್ನು ಆರಾಧಿಸುವದಕ್ಕೆ ಯೆರೂಸಲೇಮಿಗೆ ಹೋಗದೆ ಇರುವವರ್ಯಾರೋ ಅವರ ಮೇಲೆ ಮಳೆ ಇಲ್ಲದೆ ಇರುವದು.
14:18b.ZEC.014.018 ಮಳೆ ಇಲ್ಲದ ಐಗುಪ್ತದ ಗೋತ್ರದವರು ಹೋಗದಿದ್ದರೆ ಗುಡಾರಗಳ ಹಬ್ಬವನ್ನು ಆಚರಿಸುವದಕ್ಕೆ ಬಾರದ ಅನ್ಯಜನಾಂಗಗಳನ್ನು ಕರ್ತನು ಹೊಡೆಯುವ ವ್ಯಾಧಿಯು ಅವರ ಮೇಲೆ ಇರುವದು.
14:19b.ZEC.014.019 ಇದೇ ಐಗುಪ್ತದ ದಂಡನೆಯೂ ಗುಡಾರಗಳ ಹಬ್ಬ ವನ್ನು ಆಚರಿಸುವದಕ್ಕೆ ಬಾರದ ಎಲ್ಲಾ ಜನಾಂಗಗಳ ದಂಡನೆಯೂ ಆಗಿರುವದು.
14:20b.ZEC.014.020 ಆ ದಿನದಲ್ಲಿ ಕುದುರೆಗಳ ಗೆಜ್ಜೆಗಳ ಮೇಲೆ ಕರ್ತನಿಗೆ ಪರಿಶುದ್ಧವು ಎಂದಿರುವದು; ಕರ್ತನ ಆಲಯದ ಪಾತ್ರೆಗಳು ಬಲಿಪೀಠದ ಮುಂದಿನ ಪಾತ್ರೆಗಳ ಹಾಗಿರುವವು.ಹೌದು, ಯೆರೂಸಲೇಮಿ ನಲ್ಲಿಯೂ ಯೆಹೂದದಲ್ಲಿಯೂ ಇರುವ ಪ್ರತಿ ಯೊಂದು ಪಾತ್ರೆಯು ಸೈನ್ಯಗಳ ಕರ್ತನಿಗೆ ಪರಿಶುದ್ಧ ವಾಗಿರುವವು; ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳಲ್ಲಿ ತಕ್ಕೊಂಡು ಬೇಯಿಸುವರು; ಆ ದಿನದಲ್ಲಿ ಕಾನಾನ್ಯನು ಸೈನ್ಯಗಳ ಕರ್ತನ ಆಲಯದಲ್ಲಿ ಇನ್ನು ಮೇಲೆ ಇರುವದೇ ಇಲ್ಲ.
14:21b.ZEC.014.021 ಹೌದು, ಯೆರೂಸಲೇಮಿ ನಲ್ಲಿಯೂ ಯೆಹೂದದಲ್ಲಿಯೂ ಇರುವ ಪ್ರತಿ ಯೊಂದು ಪಾತ್ರೆಯು ಸೈನ್ಯಗಳ ಕರ್ತನಿಗೆ ಪರಿಶುದ್ಧ ವಾಗಿರುವವು; ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳಲ್ಲಿ ತಕ್ಕೊಂಡು ಬೇಯಿಸುವರು; ಆ ದಿನದಲ್ಲಿ ಕಾನಾನ್ಯನು ಸೈನ್ಯಗಳ ಕರ್ತನ ಆಲಯದಲ್ಲಿ ಇನ್ನು ಮೇಲೆ ಇರುವದೇ ಇಲ್ಲ.
- Holder of rights
- Multilingual Bible Corpus
- Citation Suggestion for this Object
- TextGrid Repository (2025). Kannada Collection. Zechariah (Kannada). Zechariah (Kannada). Multilingual Parallel Bible Corpus. Multilingual Bible Corpus. https://hdl.handle.net/21.11113/0000-0016-A1E0-4