Matthew (Kannada)

Matthew (Kannada)

1

1:1b.MAT.001.001 ಯೇಸು ಕ್ರಿಸ್ತನ ವಂಶಾವಳಿಯ ಪುಸ್ತಕವು; ಆತನು ದಾವೀದನ ಮಗನು, ಆತನು ಅಬ್ರ ಹಾಮನ ಮಗನು.

1:2b.MAT.001.002 ಅಬ್ರಹಾಮನಿಂದ ಇಸಾಕನು ಹುಟ್ಟಿದನು; ಇಸಾಕ ನಿಂದ ಯಾಕೋಬನು ಹುಟ್ಟಿದನು; ಯಾಕೋಬ ನಿಂದ ಯೂದನೂ ಅವನ ಸಹೋದರರೂ ಹುಟ್ಟಿ ದರು;

1:3b.MAT.001.003 ಯೂದನಿಂದ ತಾಮಾರಳಲ್ಲಿ ಪೆರೆಚನೂ ಜೆರಹನೂ ಹುಟ್ಟಿದರು; ಪೆರೆಚನಿಂದ ಹೆಚ್ರೋಮನು ಹುಟ್ಟಿದನು; ಹೆಚ್ರೋಮನಿಂದ ಅರಾಮನು ಹುಟ್ಟಿ ದನು;

1:4b.MAT.001.004 ಅರಾಮನಿಂದ ಅವ್ಮೆಾನಾದಾಬನು ಹುಟ್ಟಿ ದನು; ಅವ್ಮೆಾನಾದಾಬನಿಂದ ನಹಶೋನನು ಹುಟ್ಟಿ ದನು; ನಹಶೋನನಿಂದ ಸಲ್ಮೋನನು ಹುಟ್ಟಿದನು;

1:5b.MAT.001.005 ಸಲ್ಮೋನನಿಂದ ರಾಹಾಬಳಲ್ಲಿ ಬೋವಜನು ಹುಟ್ಟಿ ದನು; ಬೋವಜನಿಂದ ರೂತಳಲ್ಲಿ ಓಬೇದನು ಹುಟ್ಟಿದನು; ಓಬೇದನಿಂದ ಇಷಯನು ಹುಟ್ಟಿದನು;

1:6b.MAT.001.006 ಇಷಯನಿಂದ ಅರಸನಾದ ದಾವೀದನು ಹುಟ್ಟಿದನು. ಅರಸನಾದ ದಾವೀದನಿಂದ ಊರೀಯನ ಹೆಂಡತಿ ಯಾಗಿದ್ದವಳಲ್ಲಿ ಸೊಲೊಮೋನನು ಹುಟ್ಟಿದನು;

1:7b.MAT.001.007 ಸೊಲೊಮೋನನಿಂದ ರೆಹಬ್ಬಾಮನು ಹುಟ್ಟಿದನು; ರೆಹಬ್ಬಾಮನಿಂದ ಅಬೀಯನು ಹುಟ್ಟಿದನು; ಅಬೀಯನಿಂದ ಆಸನು ಹುಟ್ಟಿದನು;

1:8b.MAT.001.008 ಆಸನಿಂದ ಯೆಹೋಷಾಫಾಟನು ಹುಟ್ಟಿದನು; ಯೆಹೋಷಾ ಫಾಟನಿಂದ ಯೆಹೋರಾಮನು ಹುಟ್ಟಿದನು; ಯೆಹೋ ರಾಮನಿಂದ ಉಜ್ಜೀಯನು ಹುಟ್ಟಿದನು;

1:9b.MAT.001.009 ಉಜ್ಜೀಯ ನಿಂದ ಯೋತಾಮನು ಹುಟ್ಟಿದನು; ಯೋತಾಮನಿಂದ ಆಹಾಜನು ಹುಟ್ಟಿದನು; ಆಹಾಜನಿಂದ ಹಿಜ್ಕೀಯನು ಹುಟ್ಟಿದನು;

1:10b.MAT.001.010 ಹಿಜ್ಕೀಯನಿಂದ ಮನಸ್ಸೆಯು ಹುಟ್ಟಿದನು; ಮನಸ್ಸೆಯಿಂದ ಆಮೋನನು ಹುಟ್ಟಿದನು; ಆಮೋನನಿಂದ ಯೋಷೀಯನು ಹುಟ್ಟಿದನು;

1:11b.MAT.001.011 ಅವರು ಬಾಬೆಲಿಗೆ ಸೆರೆಯಾಗಿ ಒಯ್ಯಲ್ಪಟ್ಟ ಸಮಯದಲ್ಲಿ ಯೋಷೀಯನಿಂದ ಯೆಕೊನ್ಯನೂ ಅವನ ಸಹೋದರರೂ ಹುಟ್ಟಿದರು.

1:12b.MAT.001.012 ಅವರು ಬಾಬೆಲಿಗೆ ಬಂದ ಮೇಲೆ ಯೆಕೂನ್ಯ ನಿಂದ ಶೆಯಲ್ತಿಯೇಲನು ಹುಟ್ಟಿದನು; ಶೆಯೆಲ್ತಿ ಯೇಲಿನಿಂದ ಜೆರುಬ್ಬಾಬೆಲನು ಹುಟ್ಟಿದನು;

1:13b.MAT.001.013 ಜೆರುಬ್ಬಾಬೆಲನಿಂದ ಅಬಿಹೂದನು ಹುಟ್ಟಿದನು; ಅಬಿಹೂದನಿಂದ ಎಲ್ಯಕೀಮನು ಹುಟ್ಟಿದನು; ಎಲ್ಯ ಕೀಮನಿಂದ ಅಜೋರನು ಹುಟ್ಟಿದನು;

1:14b.MAT.001.014 ಅಜೋರ ನಿಂದ ಸದೋಕನು ಹುಟ್ಟಿದನು; ಸದೋಕನಿಂದ ಅಖೀಮನು ಹುಟ್ಟಿದನು; ಅಖೀಮನಿಂದ ಎಲಿ ಹೂದನು ಹುಟ್ಟಿದನು;

1:15b.MAT.001.015 ಎಲಿಹೂದನಿಂದ ಎಲಿ ಯಾಜರನು ಹುಟ್ಟಿದನು; ಎಲಿಯಾಜರನಿಂದ ಮತ್ತಾನ ನು ಹುಟ್ಟಿದನು; ಮತ್ತಾನನಿಂದ ಯಾಕೋಬನು ಹುಟ್ಟಿದನು;

1:16b.MAT.001.016 ಕ್ರಿಸ್ತನೆಂದು ಕರೆಯಲ್ಪಟ್ಟ ಯೇಸು ಮರಿ ಯಳಲ್ಲಿ ಹುಟ್ಟಿದನು; ಆಕೆಯ ಗಂಡನಾದ ಯೋಸೇ ಫನು ಯಾಕೋಬನಿಂದ ಹುಟ್ಟಿದನು.

1:17b.MAT.001.017 ಹೀಗೆ ಅಬ್ರಹಾಮನಿಂದ ದಾವೀದನ ವರೆಗೆ ಒಟ್ಟು ಹದಿನಾಲ್ಕು ತಲೆಗಳು; ದಾವೀದನು ಮೊದಲು ಗೊಂಡು ಬಾಬೆಲಿಗೆ ಸೆರೆಹೋಗುವ ವರೆಗೆ ಹದಿ ನಾಲ್ಕು ತಲೆಗಳು; ಬಾಬೆಲಿಗೆ ಸೆರೆಹೋದಂದಿನಿಂದ ಕ್ರಿಸ್ತನ ವರೆಗೆ ಹದಿನಾಲ್ಕು ತಲೆಗಳು.

1:18b.MAT.001.018 ಯೇಸು ಕ್ರಿಸ್ತನ ಜನನವು ಹೀಗಾಯಿತು: ಆತನ ತಾಯಿಯಾದ ಮರಿಯಳನ್ನು ಯೋಸೇಫನಿಗೆ ನಿಶ್ಚಯ ಮಾಡಿದಾಗ ಅವರು ಕೂಡುವದಕ್ಕಿಂತ ಮುಂಚೆ ಆಕೆಯು ಪವಿತ್ರಾತ್ಮನಿಂದ ಗರ್ಭಿಣಿಯಾದದ್ದು ಕಂಡು ಬಂತು.

1:19b.MAT.001.019 ಆದರೆ ಆಕೆಯ ಗಂಡನಾದ ಯೋಸೇಫನು ನೀತಿವಂತನಾಗಿದ್ದು ಆಕೆಯನ್ನು ಬೈಲಿಗೆ ತರುವದಕ್ಕೆ ಮನಸ್ಸಿಲ್ಲದೆ ರಹಸ್ಯವಾಗಿ ಆಕೆಯನ್ನು ಬಿಟ್ಟುಬಿಡಬೇಕೆಂದು ಆಲೋಚಿಸುತ್ತಿದ್ದನು.

1:20b.MAT.001.020 ಅವನು ಇವುಗಳನ್ನು ಆಲೋಚನೆ ಮಾಡುತ್ತಿದ್ದಾಗ ಇಗೋ, ಕರ್ತನ ದೂತನು ಅವನಿಗೆ ಕನಸಿನಲ್ಲಿ ಕಾಣಿಸಿ ಕೊಂಡು-- ಯೋಸೇಫನೇ, ದಾವೀದನ ಕುಮಾರನೇ, ನಿನ್ನ ಹೆಂಡತಿಯಾದ ಮರಿಯಳನ್ನು ಸೇರಿಸಿಕೊಳ್ಳು ವದಕ್ಕೆ ಭಯಪಡಬೇಡ; ಯಾಕಂದರೆ ಆಕೆಯ ಗರ್ಭವು ಪವಿತ್ರಾತ್ಮನಿಂದಲೇ ಆಗಿದೆ.

1:21b.MAT.001.021 ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ಯೇಸು ಎಂದು ಕರೆಯಬೇಕು; ಯಾಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು ಅಂದನು.

1:22b.MAT.001.022 ಪ್ರವಾದಿಯ ಮುಖಾಂತರ ಕರ್ತನು ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು.

1:23b.MAT.001.023 ಆ ಮಾತೇನಂದರೆ -- ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಳು; ಅವರು ಆತನ ಹೆಸರನ್ನು ಇಮ್ಮಾನುವೇಲ್‌ ಎಂದು ಕರೆಯುವರು ಎಂಬದೇ. ದೇವರು ನಮ್ಮ ಕೂಡ ಇದ್ದಾನೆ ಎಂಬದು ಇದರ ಅರ್ಥ.

1:24b.MAT.001.024 ಆಗ ಯೋಸೇ ಫನು ನಿದ್ರೆಯಿಂದ ಎಚ್ಚತ್ತು ಕರ್ತನ ದೂತನು ತನಗೆ ಅಪ್ಪಣೆ ಕೊಟ್ಟಂತೆ ತನ್ನ ಹೆಂಡತಿಯನ್ನು ಸೇರಿಸಿಕೊಂಡನು;ಆಕೆಯು ತನ್ನ ಚೊಚ್ಚಲ ಮಗನನ್ನು ಹೆರುವ ತನಕ ಅವನು ಆಕೆಯನ್ನು ಅರಿಯಲಿಲ್ಲ; ಅವನು ಆತನ ಹೆಸರನ್ನು ಯೇಸು ಎಂದು ಕರೆದನು.

1:25b.MAT.001.025 ಆಕೆಯು ತನ್ನ ಚೊಚ್ಚಲ ಮಗನನ್ನು ಹೆರುವ ತನಕ ಅವನು ಆಕೆಯನ್ನು ಅರಿಯಲಿಲ್ಲ; ಅವನು ಆತನ ಹೆಸರನ್ನು ಯೇಸು ಎಂದು ಕರೆದನು.

2

2:1b.MAT.002.001 ಅರಸನಾದ ಹೆರೋದನ ದಿನಗಳಲ್ಲಿ ಯೂದಾಯದ ಬೇತ್ಲೆಹೇಮಿನಲ್ಲಿ ಯೇಸು ಹುಟ್ಟಿದಾಗ ಇಗೋ, ಮೂಡಲದಿಂದ ಜ್ಞಾನಿಗಳು ಯೆರೂಸಲೇಮಿಗೆ ಬಂದು --

2:2b.MAT.002.002 ಯೆಹೂದ್ಯರ ಅರಸ ನಾಗಿ ಹುಟ್ಟಿದಾತನು ಎಲ್ಲಿದ್ದಾನೆ? ಯಾಕೆಂದರೆ ನಾವು ಮೂಡಲದಲ್ಲಿ ಆತನ ನಕ್ಷತ್ರವನ್ನು ನೋಡಿ ಆತನನ್ನು ಆರಾಧಿಸುವದಕ್ಕೆ ಬಂದಿದ್ದೇವೆ ಅಂದರು.

2:3b.MAT.002.003 ಅರಸನಾದ ಹೆರೋದನು ಇವುಗಳನ್ನು ಕೇಳಿ ಅವನು ಯೆರೂಸ ಲೇಮಿನವರೆಲ್ಲರೊಂದಿಗೆ ಕಳವಳಪಟ್ಟನು.

2:4b.MAT.002.004 ಇದಲ್ಲದೆ ಅವನು ಜನರ ಎಲ್ಲಾ ಪ್ರಧಾನ ಯಾಜಕರನ್ನೂ ಶಾಸ್ತ್ರಿಗಳನ್ನೂ ಒಟ್ಟುಗೂಡಿಸಿ ಕ್ರಿಸ್ತನು ಹುಟ್ಟತಕ್ಕದ್ದು ಎಲ್ಲಿ ಎಂದು ಅವರನ್ನು ವಿಚಾರಿಸಿದನು.

2:5b.MAT.002.005 ಅದಕ್ಕೆ ಅವರು ಅವನಿಗೆ--ಯೂದಾಯದ ಬೇತ್ಲೆಹೇಮಿ ನಲ್ಲಿಯೇ; ಯಾಕಂದರೆ ಪ್ರವಾದಿಯಿಂದ ಹೀಗೆ ಬರೆಯಲ್ಪಟ್ಟಿದೆ--

2:6b.MAT.002.006 ಯೂದಾಯದ ಸೀಮೆಯಲ್ಲಿನ ಬೇತ್ಲೆಹೇಮೇ, ಯೂದಾಯದ ಮುಖ್ಯ ಪಟ್ಟಣಗಳಲ್ಲಿ ನೀನು ಎಷ್ಟು ಮಾತ್ರವೂ ಸಣ್ಣದಲ್ಲ; ಯಾಕಂದರೆ ನನ್ನ ಜನರಾದ ಇಸ್ರಾಯೇಲ್ಯರನ್ನು ಆಳುವ ಒಬ್ಬ ಅಧಿಪತಿಯು ನಿನ್ನೊಳಗಿಂದ ಬರುವನು ಎಂದು ಹೇಳಿದರು.

2:7b.MAT.002.007 ಆಗ ಹೆರೋದನು ರಹಸ್ಯವಾಗಿ ಆ ಜ್ಞಾನಿಗಳನ್ನು ಕರೆಯಿಸಿ ಆ ನಕ್ಷತ್ರವು ಯಾವ ಕಾಲದಲ್ಲಿ ಕಾಣಿಸಿಕೊಂಡಿತೆಂದು ಅವರನ್ನು ಪರಿಷ್ಕಾರವಾಗಿ ವಿಚಾರಿಸಿಕೊಂಡು

2:8b.MAT.002.008 ಅವರನ್ನು ಬೇತ್ಲೆಹೇಮಿಗೆ ಕಳುಹಿ ಸುವಾಗ--ನೀವು ಹೋಗಿ ಆ ಶಿಶುವಿನ ವಿಷಯದಲ್ಲಿ ಪರಿಷ್ಕಾರವಾಗಿ ಹುಡುಕಿ ಆತನನ್ನು ಕಂಡುಕೊಂಡ ಮೇಲೆ ತಿರಿಗಿ ಬಂದು ನನಗೆ ತಿಳಿಸಿರಿ; ಆಗ ನಾನು ಸಹ ಬಂದು ಆತನನ್ನು ಆರಾಧಿಸುವೆನು ಅಂದನು.

2:9b.MAT.002.009 ಅವರು ಅರಸನ ಮಾತನ್ನು ಕೇಳಿ ಹೊರಟಾಗ ಇಗೋ, ಮೂಡಲದಲ್ಲಿ ಅವರು ಕಂಡ ನಕ್ಷತ್ರವು ಶಿಶುವು ಇದ್ದ ಸ್ಥಳದ ಮೇಲೆ ಬಂದು ನಿಲ್ಲುವ ತನಕ ಅವರ ಮುಂದೆ ಹೋಯಿತು.

2:10b.MAT.002.010 ಅವರು ಆ ನಕ್ಷತ್ರವನ್ನು ಕಂಡು ಅತ್ಯಧಿಕವಾದ ಆನಂದದಿಂದ ಸಂತೋಷಪಟ್ಟರು.

2:11b.MAT.002.011 ಅವರು ಮನೆಯೊಳಕ್ಕೆ ಬಂದಾಗ ಆ ಶಿಶುವನ್ನು ಆತನ ತಾಯಿಯಾದ ಮರಿಯಳೊಂದಿಗೆ ಕಂಡುಕೊಂಡು ಸಾಷ್ಟಾಂಗವೆರಗಿ ಆತನನ್ನು ಆರಾಧಿಸಿದರು; ತರುವಾಯ ತಮ್ಮ ಬೊಕ್ಕಸಗಳನ್ನು ತೆರೆದು ಚಿನ್ನ ಧೂಪ ರಕ್ತಬೋಳಗಳನ್ನು ಆತನಿಗೆ ಕಾಣಿಕೆಯಾಗಿ ಅರ್ಪಿಸಿದರು.

2:12b.MAT.002.012 ಆಮೇಲೆ ಅವರು ಹೆರೋದನ ಬಳಿಗೆ ಹಿಂತಿರುಗಬಾರದೆಂದು ಕನಸಿನಲ್ಲಿ ದೇವರಿಂದ ಎಚ್ಚರಿಸಲ್ಪಟ್ಟು ಬೇರೊಂದು ದಾರಿಯಿಂದ ತಮ್ಮ ಸ್ವದೇಶಕ್ಕೆ ಹೊರಟುಹೋದರು.

2:13b.MAT.002.013 ಅವರು ಹೋದಮೇಲೆ ಇಗೋ, ಕರ್ತನ ದೂತನು ಕನಸಿನಲ್ಲಿ ಯೋಸೇಫನಿಗೆ ಕಾಣಿಸಿ ಕೊಂಡು -- ಎದ್ದು ಈ ಶಿಶುವನ್ನೂ ಇದರ ತಾಯಿ ಯನ್ನೂ ಕರಕೊಂಡು ಐಗುಪ್ತಕ್ಕೆ ಓಡಿಹೋಗಿ ನಾನು ನಿನಗೆ ತಿಳಿಸುವ ತನಕ ಅಲ್ಲೇ ಇರು; ಯಾಕಂದರೆ ಹೆರೋದನು ಈ ಶಿಶುವನ್ನು ಕೊಲ್ಲಬೇಕೆಂದು

2:14b.MAT.002.014 ಆಗ ಅವನು ಎದ್ದು ಆ ಶಿಶುವನ್ನೂ ಅದರ ತಾಯಿಯನ್ನೂ ಕರ ಕೊಂಡು ರಾತ್ರಿಯಲ್ಲಿ ಐಗುಪ್ತಕ್ಕೆ ಹೊರಟುಹೋಗಿ ಹೆರೋದನು ಸಾಯುವ ವರೆಗೆ ಅಲ್ಲೇ ಇದ್ದನು.

2:15b.MAT.002.015 ಅದು--ನಾನು ನನ್ನ ಮಗನನ್ನು ಐಗುಪ್ತದಿಂದ ಕರೆದೆನು ಎಂದು ಪ್ರವಾದಿಯ ಮುಖಾಂತರ ಕರ್ತನಿಂದ ಹೇಳಲ್ಪಟ್ಟ ಮಾತು ನೆರವೇರುವಂತೆ ಹೀಗಾಯಿತು.

2:16b.MAT.002.016 ಆಗ ಜ್ಞಾನಿಗಳು ತನ್ನನ್ನು ಪರಿಹಾಸ್ಯ ಮಾಡಿ ದರೆಂದು ಹೆರೋದನು ತಿಳಿದು ಅತಿ ರೋಷಗೊಂಡ ವನಾಗಿ ತಾನು ಅವರ ಮೂಲಕ ಪರಿಷ್ಕಾರವಾಗಿ ಶೋಧಿಸಿದ ಕಾಲಕ್ಕನುಸಾರ ಬೆತ್ಲೆಹೇಮಿನಲ್ಲಿಯೂ ಅದರ ಎಲ್ಲಾ ಪ್ರಾಂತ್ಯಗಳ ಮೇರೆಗಳಲ್ಲಿಯೂ ಎರಡು ವರುಷ ಮತ್ತು ಅದರೊಳಗಿದ್ದ ಎಲ್ಲಾ ಮಕ್ಕ

2:17b.MAT.002.017 ಆಗ ಪ್ರವಾದಿಯಾದ ಯೆರೆವಿಾಯ ನಿಂದ ಹೇಳಲ್ಪಟ್ಟದ್ದು ನೆರವೇರಿತು;

2:18b.MAT.002.018 ಅದೇನಂದರೆ--ರಾಮದಲ್ಲಿ ಪ್ರಲಾಪವೂ ಅಳುವಿಕೆಯೂ ಬಹು ಶೋಕದ ಧ್ವನಿಯೂ ಕೇಳಿಸಿತು; ರಾಹೇಲಳು ತನ್ನ ಮಕ್ಕಳಿಗೋಸ್ಕರ ಅಳುತ್ತಾ ಅವರು ಇಲ್ಲದ್ದರಿಂದ ಆದರಣೆ ಹೊಂದಲೊಲ್ಲದೆ ಇದ್ದಳು ಎಂಬದೇ.

2:19b.MAT.002.019 ಹೆರೋದನು ಸತ್ತ ಮೇಲೆ ಇಗೋ, ಐಗುಪ್ತದಲ್ಲಿ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿ ಕೊಂಡು--

2:20b.MAT.002.020 ಎದ್ದು ಶಿಶುವನ್ನೂ ಅದರ ತಾಯಿಯನ್ನೂ ಕರಕೊಂಡು ಇಸ್ರಾಯೇಲ್‌ ದೇಶಕ್ಕೆ ಹೋಗು; ಯಾಕಂದರೆ ಶಿಶುವಿನ ಪ್ರಾಣವನ್ನು ತೆಗೆಯಬೇಕೆಂದು ಹುಡುಕುವವರು ಸತ್ತುಹೋದರು ಎಂದು ಹೇಳಿದನು.

2:21b.MAT.002.021 ಆಗ ಅವನು ಎದ್ದು ಆ ಶಿಶುವನ್ನೂ ಅದರ ತಾಯಿ ಯನ್ನೂ ಕರಕೊಂಡು ಇಸ್ರಾಯೇಲ್‌ ದೇಶಕ್ಕೆ ಬಂದಾಗ

2:22b.MAT.002.022 ಅರ್ಖೆಲಾಯನು ತನ್ನ ತಂದೆಯಾದ ಹೆರೋದನಿಗೆ ಬದಲಾಗಿ ಯೂದಾಯದಲ್ಲಿ ಆಳುತ್ತಿದ್ದಾನೆಂದು ಕೇಳಿ ಅಲ್ಲಿಗೆ ಹೋಗುವದಕ್ಕೆ ಭಯಪಟ್ಟನು; ಆದಾಗ್ಯೂ ಕನಸಿನಲ್ಲಿ ದೇವರಿಂದ ಎಚ್ಚರಿಸಲ್ಪಟ್ಟವನಾಗಿ ಗಲಿಲಾಯ ಪ್ರಾಂತ್ಯದ ಕಡೆಗೆ ತಿರುಗಿಕೊಂಡನು.ಅವನು ನಜರೇತೆಂಬ ಪಟ್ಟಣಕ್ಕೆ ಬಂದು ಅಲ್ಲಿ ವಾಸಿಸಿದನು; ಇದರಿಂದ--ಆತನು ನಜರಾಯನೆಂದು ಕರೆಯಲ್ಪ ಡುವನು ಎಂಬದಾಗಿ ಪ್ರವಾದಿಗಳಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಹೀಗಾಯಿತು.

2:23b.MAT.002.023 ಅವನು ನಜರೇತೆಂಬ ಪಟ್ಟಣಕ್ಕೆ ಬಂದು ಅಲ್ಲಿ ವಾಸಿಸಿದನು; ಇದರಿಂದ--ಆತನು ನಜರಾಯನೆಂದು ಕರೆಯಲ್ಪ ಡುವನು ಎಂಬದಾಗಿ ಪ್ರವಾದಿಗಳಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಹೀಗಾಯಿತು.

3

3:1b.MAT.003.001 ಆ ದಿನಗಳಲ್ಲಿ ಬಾಪ್ತಿಸ್ಮ ಮಾಡಿಸುವ ಯೋಹಾನನು ಬಂದು ಯೂದಾಯದ ಅಡವಿಯಲ್ಲಿ ಸಾರುತ್ತಾ--

3:2b.MAT.003.002 ನೀವು ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪ ವಾಗಿದೆ ಎಂದು ಹೇಳಿದನು.

3:3b.MAT.003.003 ಯಾಕಂದರೆ--ಕರ್ತನ ಮಾರ್ಗವನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂಬದಾಗಿ ಪ್ರವಾದಿಯಾದ ಯೆಶಾಯ ನಿಂದ ಹೇಳಲ್ಪಟ್ಟವನು ಇವನೇ.

3:4b.MAT.003.004 ಈ ಯೋಹಾನನಿಗೆ ಒಂಟೇ ಕೂದಲಿನ ಉಡುಪೂ ಸೊಂಟಕ್ಕೆ ಚರ್ಮದ ನಡುಕಟ್ಟೂ ಇದ್ದವು; ಮತ್ತು ಮಿಡತೆಗಳೂ ಕಾಡು ಜೇನೂ ಇವನಿಗೆ ಆಹಾರವಾಗಿದ್ದವು.

3:5b.MAT.003.005 ಆಗ ಯೆರೂಸಲೇಮಿನವರೂ ಎಲ್ಲಾ ಯೂದಾಯ ದವರೂ ಯೊರ್ದನ್‌ ಹೊಳೆಯ ಸುತ್ತಲಿರುವ ಎಲ್ಲಾ ಪ್ರದೇಶದವರೂ ಅವನ ಬಳಿಗೆ ಹೊರಟುಹೋದರು.

3:6b.MAT.003.006 ಅವರು ತಮ್ಮ ಪಾಪಗಳನ್ನು ಅರಿಕೆಮಾಡಿ ಯೊರ್ದನಿನಲ್ಲಿ ಅವನಿಂದ ಬಾಪ್ತಿಸ್ಮ ಮಾಡಿಕೊಂಡರು.

3:7b.MAT.003.007 ಆದರೆ ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳು ವದಕ್ಕಾಗಿ ಬರುವದನ್ನು ಅವನು ಕಂಡು ಅವರಿಗೆ-- ಓ ಸರ್ಪ ಸಂತತಿಯವರೇ, ಬರುವದಕ್ಕಿರುವ ಕೋಪ ದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮ್ಮನ್ನು ಎಚ್ಚರಿಸಿದವರು ಯಾರು?

3:8b.MAT.003.008 ಹಾಗಾದರೆ ಮಾನಸಾಂತರಕ್ಕೆ ತಕ್ಕ ಫಲ ಗಳನ್ನು ಫಲಿಸಿರಿ;

3:9b.MAT.003.009 ಮತ್ತು -- ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ ಎಂದು ನಿಮ್ಮ ನಿಮ್ಮೊಳಗೆ ಅಂದು ಕೊಳ್ಳಬೇಡಿರಿ; ಯಾಕಂದರೆ ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸ ಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.

3:10b.MAT.003.010 ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇ ಫಲವನ್ನು ಫಲಿಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿ ಯಲ್ಲಿ ಹಾಕಲ್ಪಡುವದು.

3:11b.MAT.003.011 ನಾನು ಮಾನ ಸಾಂತರದ ನಿಮಿತ್ತ ನಿಮಗೆ ನೀರಿನಲ್ಲಿ ಬಾಪ್ತಿಸ್ಮ ಮಾಡಿಸುವದು ನಿಜವೇ; ಆದರೆ ನನ್ನ ಹಿಂದೆ ಬರುವಾತನು ನನಗಿಂತಲೂ ಶಕ್ತನಾಗಿದ್ದಾನೆ. ಆತನ ಕೆರಗಳನ್ನು ಹೊರುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾ ತ್ಮನಿಂದಲೂ ಬೆಂಕಿಯಿಂದಲೂ ನಿಮಗೆ ಬಾಪ್ತಿಸ್ಮ ಮಾಡಿ ಸುವನು.

3:12b.MAT.003.012 ಒನೆಯುವ ಮೊರವನ್ನು ಆತನು ತನ್ನ ಕೈಯಲ್ಲಿ ಹಿಡಿದಿದ್ದಾನೆ; ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ತನ್ನ ಗೋಧಿಯನ್ನು ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಟ್ಟುಬಿಡುವನು ಎಂದು ಹೇಳಿದನು.

3:13b.MAT.003.013 ಆಗ ಯೇಸು ಯೋಹಾನನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳಬೇಕೆಂದು ಗಲಿಲಾಯದಿಂದ ಯೊರ್ದ ನಿಗೆ ಬಂದನು.

3:14b.MAT.003.014 ಆದರೆ ಯೋಹಾನನು ಆತನನ್ನು ತಡೆದು--ನಾನು ನಿನ್ನಿಂದ ಬಾಪ್ತಿಸ್ಮ ಮಾಡಿಸಿ ಕೊಳ್ಳುವದು ಅಗತ್ಯವಿರಲಾಗಿ ನೀನು ನನ್ನ ಬಳಿಗೆ ಬರುವದೇನು ಎಂದು ಹೇಳಿದನು.

3:15b.MAT.003.015 ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಸದ್ಯಕ್ಕೆ ಒಪ್ಪಿಕೋ; ಯಾಕಂದರೆ ಎಲ್ಲಾ ನೀತಿಯನ್ನು ಹೀಗೆ ನೆರವೇರಿ ಸುವದು ನಮಗೆ ಯೋಗ್ಯವಾಗಿದೆ ಎಂದು ಹೇಳಿದನು. ಆಗ ಅವನು ಒಪ್ಪಿಕೊಂಡನು.

3:16b.MAT.003.016 ಯೇಸು ಬಾಪ್ತಿಸ್ಮ ಮಾಡಿಸಿಕೊಂಡು ನೀರಿನಿಂದ ಮೇಲಕ್ಕೆ ಬಂದ ಕೂಡಲೆ ಇಗೋ, ಆತನಿಗೆ ಆಕಾಶಗಳು ತೆರೆಯಲ್ಪಟ್ಟು ದೇವರ ಆತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿದುಬರುವದನ್ನು ಆತನು ಕಂಡನು.ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.

3:17b.MAT.003.017 ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.

4

4:1b.MAT.004.001 ಆಗ ಯೇಸು ಸೈತಾನನಿಂದ ಶೋಧಿಸಲ್ಪಡು ವದಕ್ಕಾಗಿ ಆತ್ಮನಿಂದ ಅಡವಿಗೆ ನಡಿಸಲ್ಪಟ್ಟನು.

4:2b.MAT.004.002 ಆತನು ನಾಲ್ವತ್ತು ದಿವಸ ಹಗಲಿರುಳು ಉಪವಾಸವಿದ್ದ ತರುವಾಯ ಹಸಿದನು.

4:3b.MAT.004.003 ಆಗ ಆ ಶೋಧಕನು ಆತನ ಬಳಿಗೆ ಬಂದು--ನೀನು ದೇವಕುಮಾರನಾಗಿದ್ದರೆ ಈ ಕಲ್ಲುಗಳು ರೊಟ್ಟಿಯಾಗುವಂತೆ ಅಪ್ಪಣೆಕೊಡು ಅಂದನು.

4:4b.MAT.004.004 ಆದರೆ ಆತನು ಪ್ರತ್ಯುತ್ತರವಾಗಿ--ಮನುಷ್ಯನು ರೊಟ್ಟಿ ಮಾತ್ರದಿಂದಲೇ ಜೀವಿಸುವದಿಲ್ಲ, ಆದರೆ ದೇವರ ಬಾಯೊಳಗಿಂದ ಹೊರಡುವ ಪ್ರತಿಯೊಂದು ಮಾತಿನಿಂದ ಜೀವಿಸುವನು ಎಂದು ಬರೆದದೆ ಅಂದನು.

4:5b.MAT.004.005 ತರುವಾಯ ಸೈತಾನನು ಆತನನ್ನು ಪರಿಶುದ್ಧ ಪಟ್ಟಣಕ್ಕೆ ಕರೆದುಕೊಂಡುಹೋಗಿ ದೇವಾಲಯದ ಶಿಖರದ ಮೇಲೆ ನಿಲ್ಲಿಸಿ ಆತನಿಗೆ--

4:6b.MAT.004.006 ನೀನು ದೇವ ಕುಮಾರನಾಗಿದ್ದರೆ ನೀನಾಗಿಯೇ ಕೆಳಗೆ ದುಮುಕು; ಯಾಕಂದರೆ--ಯಾವ ಸಮಯದಲ್ಲಿಯಾದರೂ ನಿನ್ನ ಕಾಲು ಕಲ್ಲಿಗೆ ಅಪ್ಪಳಿಸದಂತೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಅಪ್ಪಣೆ ಕೊಡುವನು; ಮತ್ತು ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು ಎಂದು ಬರೆದದೆ ಅಂದ

4:7b.MAT.004.007 ಯೇಸು ಅವನಿಗೆ -- ನೀನು ನಿನ್ನ ದೇವರಾದ ಕರ್ತನನ್ನು ಶೋಧಿಸಬಾರದೆಂದು ಬರೆದದೆ ಎಂದು ಹೇಳಿದನು.

4:8b.MAT.004.008 ಮತ್ತೊಮ್ಮೆ ಸೈತಾನನು ಆತನನ್ನು ಅತ್ಯುನ್ನತವಾದ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಲೋಕದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ--

4:9b.MAT.004.009 ನೀನು ಅಡ್ಡಬಿದ್ದು ನನ್ನನ್ನು ಆರಾಧಿಸಿದರೆ ಇವುಗಳನ್ನೆಲ್ಲಾ ನಾನು ನಿನಗೆ ಕೊಡುವೆನು ಅಂದನು.

4:10b.MAT.004.010 ಆಗ ಯೇಸು ಅವನಿಗೆ--ಸೈತಾನನೇ, ಇಲ್ಲಿಂದ ತೊಲಗಿಹೋಗು; ಯಾಕಂದರೆ--ನೀನು ನಿನ್ನ ದೇವ ರಾದ ಕರ್ತನನ್ನು ಮಾತ್ರ ಆರಾಧಿಸಿ ಆತನೊಬ್ಬನನ್ನೇ ಸೇವಿಸಬೇಕು ಎಂಬದಾಗಿ ಬರೆದದೆ ಅಂದನು.

4:11b.MAT.004.011 ಆಗ ಸೈತಾನನು ಆತನನ್ನು ಬಿಟ್ಟನು; ಮತ್ತು ಇಗೋ, ದೇವದೂತರು ಬಂದು ಆತನನ್ನು ಉಪಚರಿಸಿದರು.

4:12b.MAT.004.012 ಯೋಹಾನನು ಸೆರೆಯಲ್ಲಿ ಹಾಕಲ್ಪಟ್ಟಿದ್ದಾನೆಂದು ಯೇಸು ಕೇಳಿ ಗಲಿಲಾಯಕ್ಕೆ ಹೊರಟುಹೋದನು.

4:13b.MAT.004.013 ಮತ್ತು ಆತನು ನಜರೇತನ್ನು ಬಿಟ್ಟು ಜೆಬುಲೋನ್‌, ನೆಫ್ತಲೀಮ್‌ ಮೇರೆಗಳ ಸಮುದ್ರತೀರದಲ್ಲಿರುವ ಕಪೆರ್ನೌಮಿಗೆ ಬಂದು ಅಲ್ಲಿ ವಾಸಿಸಿದನು.

4:14b.MAT.004.014 ಹೀಗೆ ಪ್ರವಾದಿಯಾದ ಯೆಶಾಯನಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಇದಾಯಿತು; ಅದೇನಂದರೆ--

4:15b.MAT.004.015 ಯೊರ್ದನಿನ ಆಚೆ ಸಮುದ್ರದ ಮಾರ್ಗದಲ್ಲಿರುವ ಜೆಬುಲೋನ್‌ ಪ್ರಾಂತ್ಯದಲ್ಲಿಯೂ ನೆಫ್ತಲೀಮ್‌ ಪ್ರಾಂತ್ಯ ಮತ್ತು ಅನ್ಯಜನರ ಗಲಿಲಾಯದಲ್ಲಿಯೂ

4:16b.MAT.004.016 ಕತ್ತಲೆಯಲ್ಲಿ ಕೂತಿದ್ದ ಜನರು ದೊಡ್ಡ ಬೆಳಕನ್ನು ಕಂಡರು; ಮತ್ತು ಮರಣದ ನೆರಳಿನಲ್ಲಿ ಕೂತಿದ್ದ ಆ ಪ್ರಾಂತ್ಯದವರಿಗೆ ಬೆಳಕು ಉದಯವಾಯಿತು ಎಂಬದೇ.

4:17b.MAT.004.017 ಅಂದಿನಿಂದ ಯೇಸು--ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪಿಸಿತು ಎಂದು ಸಾರಿ ಹೇಳುವದಕ್ಕೆ ಪ್ರಾರಂಭಿಸಿದನು.

4:18b.MAT.004.018 ಮತ್ತು ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದುಹೋಗುತ್ತಿದ್ದಾಗ ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ ಎಂಬ ಇಬ್ಬರು ಸಹೋದರರು ಸಮುದ್ರ ದಲ್ಲಿ ಬಲೆ ಬೀಸುವದನ್ನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು.

4:19b.MAT.004.019 ಆಗ ಆತನು ಅವರಿಗೆ-- ನನ್ನನ್ನು ಹಿಂಬಾಲಿಸಿರಿ, ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಾನು ನಿಮ್ಮನ್ನು ಮಾಡುವೆನು ಅಂದನು.

4:20b.MAT.004.020 ಅವರು ತಕ್ಷಣವೇ ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.

4:21b.MAT.004.021 ಆತನು ಅಲ್ಲಿಂದ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬ ಅವನ ಸಹೋದರನಾದ ಯೋಹಾನ ಎಂಬ ಬೇರೆ ಇಬ್ಬರು ಸಹೋದರರು ತಮ್ಮ ತಂದೆಯಾದ ಜೆಬೆದಾಯನ ಕೂಡ ದೋಣಿ ಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡು ಅವರನ್ನು ಕರೆದನು.

4:22b.MAT.004.022 ಅವರು ತಕ್ಷಣವೇ ದೋಣಿಯನ್ನೂ ತಮ್ಮ ತಂದೆಯನ್ನೂ ಬಿಟ್ಟು ಆತನನ್ನು ಹಿಂಬಾಲಿಸಿದರು.

4:23b.MAT.004.023 ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು.

4:24b.MAT.004.024 ಆತನ ಕೀರ್ತಿಯು ಸಿರಿಯದಲ್ಲೆಲ್ಲಾ ಹರಡಿತು; ಆಗ ನಾನಾ ವಿಧವಾದ ರೋಗಗಳಿಂದ ಮತ್ತು ಯಾತನೆಗಳಿಂದ ಅಸ್ವಸ್ಥರಾದವರೆಲ್ಲರನ್ನೂ ದೆವ್ವಗಳು ಹಿಡಿದವರನ್ನೂ ಮೂರ್ಛಾ ರೋಗಿಗಳನ್ನೂ ಪಾರ್ಶ್ವವಾಯುರೋಗಿ ಗಳನ್ನೂ ಆತನ ಬಳಿಗೆ ತಂದರು. ಆತನು ಅವರನ್ನು ಸ್ವಸ್ಥಪಡಿಸಿದನು.ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.

4:25b.MAT.004.025 ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.

5

5:1b.MAT.005.001 ಮತ್ತು ಆತನು ಜನಸಮೂಹಗಳನ್ನು ನೋಡಿದವನಾಗಿ ಪರ್ವತವನ್ನೇರಿದನು; ಅಲ್ಲಿ ಆತನು ಕೂತುಕೊಂಡಾಗ ಆತನ ಶಿಷ್ಯರು ಆತನ ಬಳಿಗೆ ಬಂದರು.

5:2b.MAT.005.002 ಆತನು ಬಾಯಿ ತೆರೆದು ಅವರಿಗೆ ಬೋಧಿಸಿ ಹೇಳಿದ್ದೇನಂದರೆ --

5:3b.MAT.005.003 ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಯಾಕಂದರೆ ಪರಲೋಕರಾಜ್ಯವು ಅವರದು.

5:4b.MAT.005.004 ದುಃಖಪಡುವವರು ಧನ್ಯರು; ಯಾಕಂದರೆ ಅವರು ಆದರಣೆ ಹೊಂದುವರು.

5:5b.MAT.005.005 ಸಾತ್ವಿಕರು ಧನ್ಯರು; ಯಾಕಂದರೆ ಅವರು ಭೂಮಿಯನ್ನು ಬಾಧ್ಯವಾಗಿ ಹೊಂದುವರು.

5:6b.MAT.005.006 ನೀತಿಗೋಸ್ಕರ ಹಸಿದು ಬಾಯಾರಿದವರು ಧನ್ಯರು; ಯಾಕಂದರೆ ಅವರು ತೃಪ್ತಿ ಹೊಂದುವರು.

5:7b.MAT.005.007 ಕರುಣೆಯುಳ್ಳವರು ಧನ್ಯರು; ಯಾಕಂದರೆ ಅವರು ಕರುಣೆ ಹೊಂದುವರು.

5:8b.MAT.005.008 ಶುದ್ಧ ಹೃದಯವುಳ್ಳವರು ಧನ್ಯರು; ಯಾಕಂದರೆ ಅವರು ದೇವರನ್ನು ನೋಡುವರು.

5:9b.MAT.005.009 ಸಮಾಧಾನ ಮಾಡುವವರು ಧನ್ಯರು; ಯಾಕಂದರೆ ಅವರು ದೇವರ ಮಕ್ಕಳೆಂದು ಕರೆಯಲ್ಪಡುವರು.

5:10b.MAT.005.010 ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು; ಯಾಕಂದರೆ ಪರಲೋಕರಾಜ್ಯವು ಅವರದು.

5:11b.MAT.005.011 ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ದೂಷಿಸಿ ಹಿಂಸಿಸಿ ನಿಮಗೆ ವಿರೋಧವಾಗಿ ಎಲ್ಲಾ ತರದ ಕೆಟ್ಟದ್ದನ್ನು ಸುಳ್ಳಾಗಿ ಹೇಳಿದರೆ ನೀವು ಧನ್ಯರು.

5:12b.MAT.005.012 ಸಂತೋಷಿಸಿರಿ, ಅತಿ ಉಲ್ಲಾಸದಿಂದಿರ್ರಿ; ಯಾಕಂದರೆ ಪರಲೋಕದಲ್ಲಿ ನಿಮ್ಮ ಪ್ರತಿಫಲವು ದೊಡ್ಡದಾಗಿದೆ; ನಿಮಗಿಂತ ಮುಂಚೆ ಇದ್ದ ಪ್ರವಾದಿ ಗಳನ್ನು ಅವರು ಹೀಗೆಯೇ ಹಿಂಸಿಸಿದರಲ್ಲಾ.

5:13b.MAT.005.013 ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ತನ್ನ ರುಚಿಯನ್ನು ಕಳೆದುಕೊಂಡರೆ ಅದಕ್ಕೆ ಇನ್ನಾತ ರಿಂದ ರುಚಿ ಬಂದೀತು? ಅಂದಿನಿಂದ ಅದು ನಿಷ್ಪ್ರಯೋಜನವಾದದ್ದಾಗಿ ಹೊರಗೆ ಬಿಸಾಡಲ್ಪಟ್ಟು ಜನರಿಂದ ತುಳಿದಾಡಲ್ಪಡುವದು.

5:14b.MAT.005.014 ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಬೆಟ್ಟದ ಮೇಲೆ ಇರುವ ಪಟ್ಟಣವು ಮರೆಯಾಗಿರಲಾರದು.

5:15b.MAT.005.015 ಇಲ್ಲವೆ ಮನುಷ್ಯರು ದೀಪವನ್ನು ಹೊತ್ತಿಸಿ ಕೊಳಗದೊಳಗೆ ಇಡದೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುವದು.

5:16b.MAT.005.016 ಅದರಂತೆಯೇ ಜನರು ನಿಮ್ಮ ಒಳ್ಳೇ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವ ಹಾಗೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ.

5:17b.MAT.005.017 ನ್ಯಾಯಪ್ರಮಾಣವನ್ನಾಗಲೀ ಪ್ರವಾದನೆಗಳ ನ್ನಾಗಲೀ ಹಾಳುಮಾಡುವದಕ್ಕಾಗಿ ನಾನು ಬಂದೆ ನೆಂದು ನೆನಸಬೇಡಿರಿ, ಹಾಳುಮಾಡುವದಕ್ಕಾಗಿ ಅಲ್ಲ; ಆದರೆ ನೆರವೇರಿಸುವದಕ್ಕಾಗಿ ಬಂದೆನು.

5:18b.MAT.005.018 ಆಕಾಶವೂ ಭೂಮಿಯೂ ಗತಿಸಿ ಹೋಗುವ ತನಕ ಎಲ್ಲವೂ ನೆರವೇರದ ಹೊರತು ನ್ಯಾಯಪ್ರಮಾಣದಿಂದ ಒಂದು ಸೊನ್ನೆಯಾದರೂ ಒಂದು ಗುಡುಸಾದರೂ ಅಳಿದು ಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.

5:19b.MAT.005.019 ಆದದರಿಂದ ಯಾವನಾದರೂ ಈ ಆಜ್ಞೆಗಳಲ್ಲಿ ಚಿಕ್ಕದಾದ ಒಂದನ್ನು ಮಾರಿ ಹಾಗೆಯೇ ಜನರಿಗೆ ಬೋಧಿಸಿದರೆ ಅವನು ಪರಲೋಕರಾಜ್ಯದಲ್ಲಿ ಅಲ್ಪನೆಂದು ಕರೆಯಲ್ಪಡುವನು; ಯಾವನಾದರೂ ಇವುಗಳನ್ನು ಕೈಕೊಂಡು ಬೋಧಿಸಿದರೆ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನೆಂದು ಕರೆಯಲ್ಪಡು ವನು.

5:20b.MAT.005.020 ನಾನು ನಿಮಗೆ ಹೇಳುವದೇನಂದರೆ-- ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ನಿಮ್ಮ ನೀತಿಯು ಹೆಚ್ಚಿನದಾಗಿರದ ಹೊರತು ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವದಕ್ಕಾಗುವದೇ ಇಲ್ಲ.

5:21b.MAT.005.021 ನೀನು ನರಹತ್ಯ ಮಾಡಬಾರದು; ಯಾವನಾ ದರೂ ನರಹತ್ಯಮಾಡಿದರೆ ನ್ಯಾಯತೀರ್ಪಿನ ಅಪಾ ಯಕ್ಕೆ ಒಳಗಾಗುವನು ಎಂದು ಪೂರ್ವಿಕರು ಹೇಳಿರು ವದನ್ನು ನೀವು ಕೇಳಿದ್ದೀರಿ.

5:22b.MAT.005.022 ನಾನು ನಿಮಗೆ ಹೇಳುವದೇನಂದರೆ-- ನಿಷ್ಕಾರಣವಾಗಿ ತನ್ನ ಸಹೋದರನ ಮೇಲೆ ಯಾವನಾದರೂ ಸಿಟ್ಟುಗೊಂಡರೆ ಅವನು ನ್ಯಾಯತೀರ್ಪಿನ ಅಪಾಯಕ್ಕೆ ಒಳಗಾಗುವನು; ಮತ್ತು ಯಾವನಾದರೂ ತನ್ನ ಸಹೋದರನಿಗೆ-- ವ್ಯರ್ಥವಾದವನೇ ಎಂದು ಹೇಳಿದರೆ ಅವನು ನ್ಯಾಯಸಭೆಯ ಅಪಾಯಕ್ಕೆ ಒಳಗಾಗುವನು

5:23b.MAT.005.023 ಆದದರಿಂದ ನೀನು ನಿನ್ನ ಕಾಣಿಕೆಯನ್ನು ಯಜ್ಞವೇದಿಯ ಬಳಿಗೆ ತಂದಾಗ ನಿನಗೆ ವಿರೋಧ ವಾದದ್ದು ನಿನ್ನ ಸಹೋದರನಿಗೆ ಇದೆಯೆಂದು ನೆನಪಿಗೆ ಬಂದರೆ

5:24b.MAT.005.024 ನಿನ್ನ ಕಾಣಿಕೆಯನ್ನು ನೀನು ಅಲ್ಲಿಯೇ ಯಜ್ಞವೇದಿಯ ಮುಂದೆ ಬಿಟ್ಟು ಹೊರಟು ಹೋಗಿ ಮೊದಲು ನಿನ್ನ ಸಹೋದರನೊಂದಿಗೆ ಒಂದಾಗು; ತರುವಾಯ ಬಂದು ನಿನ್ನ ಕಾಣಿಕೆಯನ್ನು ಅರ್ಪಿಸು.

5:25b.MAT.005.025 ನಿನ್ನ ವಿರೋಧಿಯ ಸಂಗಡ ನೀನು ದಾರಿಯ ಲ್ಲಿರುವಾಗಲೇ ತ್ವರೆಯಾಗಿ ಅವನ ಕೂಡ ಒಂದಾಗು; ಇಲ್ಲವಾದರೆ ಯಾವ ಸಮಯದಲ್ಲಿಯಾದರೂ ಆ ವಿರೋಧಿಯು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು ಮತ್ತು ನ್ಯಾಯಾಧಿಪತಿಯು ನಿನ್ನನ್ನು ಅಧಿಕಾರಿಗೆ ಒಪ್ಪಿಸಾನು; ಆಗ ನೀನು ಸೆರೆಯಲ್ಲಿ ಹಾಕಲ್ಪಡುವಿ.

5:26b.MAT.005.026 ನಾನು ನಿನಗೆ ನಿಜವಾಗಿ ಹೇಳುವದೇನಂದರೆ--ನೀನು ಕೊನೆಯ ಕಾಸನ್ನು ಸಲ್ಲಿಸುವ ತನಕ ಯಾವ ವಿಧದಿಂದಲೂ ಅಲ್ಲಿಂದ ಹೊರಗೆ ಬರುವದೇ ಇಲ್ಲ.

5:27b.MAT.005.027 ವ್ಯಭಿಚಾರ ಮಾಡಬಾರದು ಎಂದು ಪೂರ್ವಿಕರು ಹೇಳಿರುವದನ್ನು ನೀವು ಕೇಳಿದ್ದೀರಿ;

5:28b.MAT.005.028 ಆದರೆ ನಾನು ನಿಮಗೆ ಹೇಳುವದೇನಂದರೆ--ಒಬ್ಬ ಸ್ತ್ರೀಯನ್ನು ಮೋಹಿಸುವದಕ್ಕೆ ನೋಡುವ ಪ್ರತಿಯೊಬ್ಬನು ಆಗಲೇ ತನ್ನ ಹೃದಯದಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದ್ದಾನೆ.

5:29b.MAT.005.029 ಆದದರಿಂದ ನಿನ್ನ ಬಲಗಣ್ಣು ನಿನಗೆ ಅಭ್ಯಂತರವಾಗಿದ್ದರೆ ಅದನ್ನು ಕಿತ್ತು ನಿನ್ನಿಂದ ಬಿಸಾಡಿಬಿಡು; ಯಾಕಂದರೆ ನಿನ್ನ ಇಡೀ ಶರೀರವು ನರಕದಲ್ಲಿ ಹಾಕಲ್ಪಡುವದಕ್ಕಿಂತ ನಿನ್ನ ಅಂಗಗಳಲ್ಲಿ ಒಂದು ನಾಶವಾಗುವದು ನಿನಗೆ ಲಾಭಕರವಾಗಿದೆ.

5:30b.MAT.005.030 ನಿನ್ನ ಬಲಗೈ ನಿನಗೆ ಅಭ್ಯಂತರವಾಗಿದ್ದರೆ ಅದನ್ನು ಕಡಿದು ನಿನ್ನಿಂದ ಬಿಸಾಡಿಬಿಡು; ಯಾಕಂದರೆ ನಿನ್ನ ಇಡೀ ಶರೀರವು ನರಕದಲ್ಲಿ ಹಾಕಲ್ಪಡುವದಕ್ಕಿಂತ ನಿನ್ನ ಅಂಗಗಳಲ್ಲಿ ಒಂದು ನಾಶವಾಗುವದು ನಿನಗೆ ಲಾಭಕರವಾಗಿದೆ.

5:31b.MAT.005.031 ಯಾವನಾದರೂ ತನ್ನ ಹೆಂಡತಿಯನ್ನು ಬಿಟ್ಟುಬಿಡಬೇಕೆಂದಿದ್ದರೆ ಅವನು ಆಕೆಗೆ ತ್ಯಾಗಪತ್ರ ಕೊಡಲಿ ಎಂದು ಹೇಳಿಯದೆ;

5:32b.MAT.005.032 ಆದರೆ ನಾನು ನಿಮಗೆ ಹೇಳುವದೇನಂದರೆ--ಹಾದರದ ಕಾರಣ ದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಆಕೆಯು ವ್ಯಭಿಚಾರ ಮಾಡುವಂತೆ ಕಾರಣನಾಗುವನು; ಮತ್ತು ಬಿಡಲ್ಪಟ್ಟವಳನ್ನು ಯಾವನಾದರೂ ಮದುವೆ ಯಾದರೆ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ.

5:33b.MAT.005.033 ನೀನು ಸುಳ್ಳಾಣೆ ಇಡಬೇಡ; ಆದರೆ ನಿನ್ನ ಪ್ರಮಾಣಗಳನ್ನು ಕರ್ತನಿಗೆ ಸಲ್ಲಿಸಬೇಕು ಎಂದು ಪೂರ್ವಿಕರು ಹೇಳಿರುವದನ್ನು ನೀವು ಕೇಳಿದ್ದೀರಿ.

5:34b.MAT.005.034 ಆದರೆ ನಾನು ನಿಮಗೆ ಹೇಳುವದೇನಂದರೆ--ಎಷ್ಟು ಮಾತ್ರಕ್ಕೂ ಅಣೆಯನ್ನು ಇಡಬೇಡ. ಪರಲೋಕದ ಮೇಲೆ ಬೇಡ; ಯಾಕಂದರೆ ಅದು ದೇವರ ಸಿಂಹಾಸನವು.

5:35b.MAT.005.035 ಭೂಮಿಯ ಮೇಲೆಯೂ ಬೇಡ; ಯಾಕಂದರೆ ಅದು ಆತನ ಪಾದಪೀಠವು; ಯೆರೂಸಲೇಮಿನ ಮೇಲೆಯೂ ಬೇಡ; ಯಾಕಂದರೆ ಅದು ಆ ಮಹಾ ಅರಸನ ಪಟ್ಟಣವಾಗಿದೆ.

5:36b.MAT.005.036 ನಿನ್ನ ತಲೆಯ ಮೇಲೆ ಕೂಡ ಆಣೆ ಇಡಬೇಡ; ಯಾಕಂದರೆ ನೀನು ಒಂದು ಕೂದಲನ್ನಾದರೂ ಬಿಳಿ ಅಥವಾ ಕಪ್ಪು ಮಾಡಲಾರಿ.

5:37b.MAT.005.037 ಆದರೆ ನಿನ್ನ ಮಾತು ಹೌದಾಗಿದ್ದರೆ ಹೌದು, ಅಲ್ಲವಾಗಿದ್ದರೆ ಅಲ್ಲ ಎಂದಿರಲಿ; ಇವುಗಳಿಗಿಂತ ಹೆಚ್ಚಾದದ್ದು ಕೆಟ್ಟದ್ದ ರಿಂದ ಬರುವಂಥದ್ದು.

5:38b.MAT.005.038 ಇದಲ್ಲದೆ--ಕಣ್ಣಿಗೆ ಪ್ರತಿಯಾಗಿ ಕಣ್ಣನ್ನೂ ಹಲ್ಲಿಗೆ ಪ್ರತಿಯಾಗಿ ಹಲ್ಲನ್ನೂ ತೆಗಿಸು ಎಂದು ಹೇಳಿರುವದನ್ನು ನೀವು ಕೇಳಿದ್ದೀರಿ.

5:39b.MAT.005.039 ಆದರೆ ನಾನು ನಿಮಗೆ ಹೇಳುವದೇನಂದರೆ--ನೀವು ಕೆಟ್ಟದ್ದನ್ನು ಎದುರಿಸಬೇಡಿರಿ; ಯಾವನಾದರೂ ನಿನ್ನ ಬಲ ಗೆನ್ನೆಯ ಮೇಲೆ ಹೊಡೆದರೆ ಮತ್ತೊಂದನ್ನು ಸಹ ಅವನಿಗೆ ತಿರುಗಿಸು.

5:40b.MAT.005.040 ಯಾವನಾದರೂ ನಿನ್ನ ಸಂಗಡ ವ್ಯಾಜ್ಯವಾಡಿ ನಿನ್ನ ಮೇಲಂಗಿಯನ್ನು ತಕ್ಕೊಳ್ಳ ಬೇಕೆಂದಿದ್ದರೆ ಒಳಂಗಿಯನ್ನೂ ಕೊಟ್ಟುಬಿಡು.

5:41b.MAT.005.041 ಮತ್ತು ಯಾವನಾದರೂ ಒಂದು ಮೈಲು ಹೋಗುವಂತೆ ನಿನ್ನನ್ನು ಬಲವಂತ ಮಾಡಿದರೆ ಅವನೊಂದಿಗೆ ಎರಡು ಮೈಲು ಹೋಗು.

5:42b.MAT.005.042 ನಿನ್ನನ್ನು ಕೇಳುವವನಿಗೆ ಕೊಡು; ಮತ್ತು ನಿನ್ನಿಂದ ಕಡಾ ತಕ್ಕೊಳ್ಳಬೇಕೆಂದಿರುವವನಿಂದ ನೀನು ತಿರುಗಿಕೊಳ್ಳಬೇಡ.

5:43b.MAT.005.043 ನೀನು ನಿನ್ನ ನೆರೆಯವನನ್ನು ಪ್ರೀತಿಸಿ ನಿನ್ನ ವೈರಿಯನ್ನು ಹಗೆಮಾಡಬೇಕು ಎಂದು ಹೇಳಿರು ವದನ್ನು ನೀವು ಕೇಳಿದ್ದೀರಿ.

5:44b.MAT.005.044 ಆದರೆ ನಾನು ನಿಮಗೆ ಹೇಳುವದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ; ನಿಮ್ಮನ್ನು ನಿಂದಿಸುವವರಿಗಾಗಿಯೂ ಹಿಂಸಿಸುವವರಿಗಾಗಿಯೂ ಪ್ರಾರ್ಥಿಸಿರಿ.

5:45b.MAT.005.045 ಇದರಿಂದ ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾ ಗುವಿರಿ; ಯಾಕಂದರೆ ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ; ಮತ್ತು ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.

5:46b.MAT.005.046 ನಿಮ್ಮನ್ನು ಪ್ರೀತಿಮಾಡುವವರನ್ನೇ ನೀವು ಪ್ರೀತಿಮಾಡಿದರೆ ನಿಮಗೆ ಯಾವ ಪ್ರತಿಫಲ ಸಿಕ್ಕೀತು? ಸುಂಕದವರೂ ಹಾಗೆ ಮಾಡುತ್ತಾರಲ್ಲವೇ?

5:47b.MAT.005.047 ಇದಲ್ಲದೆ ನೀವು ನಿಮ್ಮ ಸಹೋದರರನ್ನು ಮಾತ್ರ ವಂದಿಸಿದರೆ ಬೇರೆಯವರಿಗಿಂತ ಹೆಚ್ಚೇನು ಮಾಡಿ ದಂತಾಯಿತು? ಸುಂಕದವರು ಸಹ ಹಾಗೆ ಮಾಡುತ್ತಾರಲ್ಲವೇ?ಆದದರಿಂದ ಪರಲೋಕ ದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣ ನಾಗಿರುವಂತೆಯೇ ನೀವೂ ಪರಿಪೂರ್ಣರಾಗಿರ್ರಿ.

5:48b.MAT.005.048 ಆದದರಿಂದ ಪರಲೋಕ ದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣ ನಾಗಿರುವಂತೆಯೇ ನೀವೂ ಪರಿಪೂರ್ಣರಾಗಿರ್ರಿ.

6

6:1b.MAT.006.001 ಜನರು ನೋಡಲಿ ಎಂದು ನೀವು ನಿಮ್ಮ ದಾನವನ್ನು ಅವರ ಮುಂದೆ ಮಾಡದಂತೆ ಎಚ್ಚರಿಕೆ ತಂದುಕೊಳ್ಳಿರಿ; ಇಲ್ಲವಾದರೆ ಪರಲೋಕ ದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ಸಿಗಲಾರದು.

6:2b.MAT.006.002 ಆದದರಿಂದ ಕಪಟಿಗಳು ಜನರಿಂದ ಹೊಗಳಿಸಿ ಕೊಳ್ಳಬೇಕೆಂದು ಸಭಾಮಂದಿರಗಳಲ್ಲಿಯೂ ಬೀದಿಗಳ ಲ್ಲಿಯೂ ಮಾಡುವಂತೆ ನೀನು ದಾನ ಮಾಡುವಾಗ ನಿನ್ನ ಮುಂದೆ ತುತ್ತೂರಿಯನ್ನೂದಬೇಡ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿದ್ದಾರೆ.

6:3b.MAT.006.003 ಆದರೆ ನೀನು ದಾನಮಾಡುವಾಗ ನಿನ್ನ ಬಲಗೈ ಮಾಡುವದು ನಿನ್ನ ಎಡಗೈಗೆ ತಿಳಿಯದಿರಲಿ.

6:4b.MAT.006.004 ಹೀಗೆ ನಿನ್ನ ದಾನವು ಅಂತರಂಗದಲ್ಲಿರುವದು; ಮತ್ತು ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ತಾನೇ ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.

6:5b.MAT.006.005 ನೀನು ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಇರಬೇಡ; ಯಾಕಂದರೆ ಜನರು ನೋಡುವಂತೆ ಸಭಾಮಂದಿರಗಳಲ್ಲಿಯೂ ಬೀದಿಗಳ ಮೂಲೆಗಳ ಲ್ಲಿಯೂ ನಿಂತು ಪ್ರಾರ್ಥನೆಮಾಡುವದನ್ನು ಅವರು ಪ್ರೀತಿಸುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವ ದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿ ದ್ದಾರೆ.

6:6b.MAT.006.006 ಆದರೆ ನೀನು ಪ್ರಾರ್ಥನೆ ಮಾಡುವಾಗ ನಿನ್ನ ಕೋಣೆಯೊಳಕ್ಕೆ ಹೋಗಿ ಬಾಗಿಲನ್ನು ಮುಚ್ಚಿ ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು; ಆಗ ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.

6:7b.MAT.006.007 ಆದರೆ ನೀವು ಪ್ರಾರ್ಥನೆ ಮಾಡುವಾಗ ಅನ್ಯರು ಮಾಡುವಂತೆ ವ್ಯರ್ಥವಾದದ್ದನ್ನು ಪದೇಪದೇ ಹೇಳ ಬೇಡಿರಿ ಯಾಕಂದರೆ ತಾವು ಬಹಳವಾಗಿ ಮಾತನಾಡು ವದರಿಂದ ತಮ್ಮ ಪ್ರಾರ್ಥನೆಯು ಕೇಳಲ್ಪಡುವದೆಂದು ಅವರು ಯೋಚಿಸುತ್ತಾರೆ.

6:8b.MAT.006.008 ಆದದರಿಂದ ನೀವು ಅವರಂತೆ ಇರಬೇಡಿರಿ; ನಿಮ್ಮ ತಂದೆಯನ್ನು ಕೇಳುವದಕ್ಕಿಂತ ಮುಂಚೆಯೇ ನಿಮಗೆ ಅಗತ್ಯವಾಗಿ ರುವವುಗಳು ಯಾವವು ಎಂಬದು ಆತನಿಗೆ ತಿಳಿದದೆ.

6:9b.MAT.006.009 ಆದದರಿಂದ ನೀವು ಈ ರೀತಿಯಲ್ಲಿ ಪ್ರಾರ್ಥನೆ ಮಾಡಿರಿ--ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವಾಗಿರಲಿ. ನಿನ್ನ ರಾಜ್ಯವು ಬರಲಿ.

6:10b.MAT.006.010 ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರು ವಂತೆ ಭೂಲೋಕದಲ್ಲಿಯೂ ನೆರೆವೇರಲಿ.

6:11b.MAT.006.011 ನಮ್ಮ ಅನುದಿನದ ರೊಟ್ಟಿಯನ್ನು ಈ ದಿನವು ನಮಗೆ ದಯಪಾಲಿಸು.

6:12b.MAT.006.012 ನಮ್ಮ ಸಾಲಗಾರರನ್ನು ನಾವು ಕ್ಷಮಿಸುವಂತೆ ನಮ್ಮ ಸಾಲಗಳನ್ನು ನಮಗೆ ಕ್ಷಮಿಸು.

6:13b.MAT.006.013 ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್‌.

6:14b.MAT.006.014 ಆದದರಿಂದ ನೀವು ಮನುಷ್ಯರ ಅಪರಾಧ ಗಳನ್ನು ಕ್ಷಮಿಸುವದಾದರೆ ಪರಲೋಕದ ನಿಮ್ಮ ತಂದೆಯು ಸಹ ನಿಮ್ಮನ್ನು ಕ್ಷಮಿಸುವನು.

6:15b.MAT.006.015 ನೀವು ಮನುಷ್ಯರ ಅಪರಾಧಗಳನ್ನು ಕ್ಷಮಿಸದೆ ಹೋದರೆ ನಿಮ್ಮ ತಂದೆಯೂ ನಿಮ್ಮ ಅಪರಾಧಗಳನ್ನು ಕ್ಷಮಿಸು ವದಿಲ್ಲ.

6:16b.MAT.006.016 ಇದಲ್ಲದೆ ನೀವು ಉಪವಾಸ ಮಾಡುವಾಗ ಕಪಟಿಗಳ ಹಾಗೆ ವ್ಯಸನದ ಮುಖ ಮಾಡಿಕೊಳ್ಳ ಬೇಡಿರಿ. ಯಾಕಂದರೆ ತಾವು ಉಪವಾಸವಾಗಿ ದ್ದೇವೆಂದು ಜನರಿಗೆ ತೋರುವಂತೆ ಅವರು ತಮ್ಮ ಮುಖಗಳನ್ನು ವಿಕಾರ ಮಾಡಿಕೊಳ್ಳುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿ

6:17b.MAT.006.017 ಆದರೆ ನೀನು ಉಪವಾಸ ಮಾಡುವಾಗ ನಿನ್ನ ತಲೆಗೆ ಎಣ್ಣೆ ಹಚ್ಚಿಕೊಂಡು ನಿನ್ನ ಮುಖವನ್ನು ತೊಳೆದುಕೋ.

6:18b.MAT.006.018 ಆಗ ನೀನು ಉಪವಾಸಮಾಡುತ್ತೀ ಎಂದು ಜನರಿಗೆ ಕಾಣದಿದ್ದರೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಕಾಣುವದು. ಮತ್ತು ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.

6:19b.MAT.006.019 ಭೂಲೋಕದಲ್ಲಿ ನಿಮಗೋಸ್ಕರ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಬೇಡಿರಿ; ಇಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳುಮಾಡುವದು; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವರು.

6:20b.MAT.006.020 ಆದರೆ ನಿಮ್ಮ ಗೋಸ್ಕರ ಪರಲೋಕದಲ್ಲಿ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಿರಿ; ಅಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳು ಮಾಡುವದಿಲ್ಲ; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವದೂ ಇಲ್ಲ.

6:21b.MAT.006.021 ಯಾಕಂದರೆ ನಿಮ್ಮ ಸಂಪತ್ತು ಎಲ್ಲಿ ಇದೆಯೋ ಅಲ್ಲಿ ನಿಮ್ಮ ಹೃದಯವೂ ಇರುವದು.

6:22b.MAT.006.022 ಕಣ್ಣು ಶರೀರದ ದೀಪವಾಗಿದೆ. ಆದಕಾರಣ ನಿನ್ನ ಕಣ್ಣು ಶುದ್ಧವಾಗಿದ್ದರೆ ನಿನ್ನ ಶರೀರವೆಲ್ಲಾ ಬೆಳಕಾಗಿರುವದು.

6:23b.MAT.006.023 ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ಶರೀರವೆಲ್ಲಾ ಕತ್ತಲಾಗಿರುವದು. ಆದದರಿಂದ ನಿನ್ನಲ್ಲಿರುವ ಬೆಳಕೇ ಕತ್ತಲಾಗಿರುವದಾದರೆ ಆ ಕತ್ತಲು ಎಷ್ಟೋ ಅಧಿಕವಾದದ್ದಾಗಿರುವದು.

6:24b.MAT.006.024 ಯಾವ ಮನುಷ್ಯನೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಇನ್ನೊಬ್ಬನನ್ನು ಪ್ರೀತಿಮಾಡುವನು; ಇಲ್ಲವಾದರೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬ ನನ್ನು ಅಸಡ್ಡೆ ಮಾಡುವನು. ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ.

6:25b.MAT.006.025 ಆದಕಾರಣ ನಾನು ನಿಮಗೆ ಹೇಳುವದೇ ನಂದರೆ--ನಿಮ್ಮ ಪ್ರಾಣಕ್ಕೋಸ್ಕರ ನೀವು ಏನು ತಿನ್ನಬೇಕು ಮತ್ತು ಏನು ಕುಡಿಯಬೇಕು ಎಂಬದರ ವಿಷಯಕ್ಕಾಗಲೀ ಇಲ್ಲವೆ ನಿಮ್ಮ ಶರೀರಕ್ಕೆ ನೀವು ಏನು ಹೊದ್ದುಕೊಳ್ಳಬೇಕೆಂತಾಗಲೀ ಚಿಂತೆ ಮಾಡ ಬೇಡಿರಿ; ಊಟಕ್ಕಿಂತ ಪ್ರಾಣವೂ ಉಡುಪಿಗಿಂತ ಶರೀರವೂ ಹೆ

6:26b.MAT.006.026 ಆಕಾಶದ ಪಕ್ಷಿಗಳನ್ನು ನೋಡಿರಿ; ಅವು ಬಿತ್ತುವದಿಲ್ಲ, ಕೊಯ್ಯುವದೂ ಇಲ್ಲ, ಇಲ್ಲವೆ ಕಣಜದಲ್ಲಿ ಕೂಡಿಸಿಟ್ಟುಕೊಳ್ಳುವದೂ ಇಲ್ಲ; ಆದರೂ ಪರಲೋಕದ ನಿಮ್ಮ ತಂದೆಯು ಅವುಗಳನ್ನು ಪೋಷಿಸುತ್ತಾನೆ. ಅವುಗಳಿಗಿಂತ ನೀವು ಎಷ್ಟೋ ಶ್ರೇಷ್ಠರಾದವರಲ್ಲವೇ?

6:27b.MAT.006.027 ನಿಮ್ಮಲ್ಲಿ ಯಾವ ನಾದರೂ ಚಿಂತೆಮಾಡಿ ತನ್ನ ನೀಳವನ್ನು ಒಂದು ಮೊಳ ಉದ್ದ ಬೆಳೆಸಿಕೊಳ್ಳಲು ಸಾಧ್ಯವಾದೀತೇ?

6:28b.MAT.006.028 ಮತ್ತು ಉಡುಪಿಗಾಗಿ ನೀವು ಯಾಕೆ ಚಿಂತೆ ಮಾಡುತ್ತೀರಿ? ಹೊಲದಲ್ಲಿ ತಾವರೆಗಳು ಹೇಗೆ ಬೆಳೆಯುತ್ತವೆ ಎಂಬದನ್ನು ಗಮನಿಸಿರಿ; ಅವು ಕಷ್ಟಪಡು ವದಿಲ್ಲ ಮತ್ತು ನೂಲುವದೂ ಇಲ್ಲ.

6:29b.MAT.006.029 ಆದರೂ ನಾನು ನಿಮಗೆ ಹೇಳುವದೇನಂದರೆ-- ಸೊಲೊಮೋನನು ಸಹ ತನ್ನ ಎಲ್ಲಾ ವೈಭವದಲ್ಲಿಯೂ ಇವುಗಳಲ್ಲಿ ಒಂದರಂತೆಯಾದರೂ ಧರಿಸಿರಲಿಲ್ಲ.

6:30b.MAT.006.030 ಆದದರಿಂದ ಈ ಹೊತ್ತು ಇದ್ದು ನಾಳೆ ಒಲೆಗೆ ಹಾಕಲ್ಪಡುವ ಹೊಲದ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ ಓ ಅಲ್ಪ ವಿಶ್ವಾಸಿಗಳೇ, ಆತನು ಇನ್ನೂ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸುವನಲ್ಲವೇ?

6:31b.MAT.006.031 ಆದಕಾರಣ--ನಾವು ಏನು ಊಟಮಾಡಬೇಕು? ಇಲ್ಲವೆ ಏನು ಕುಡಿಯಬೇಕು? ಇಲ್ಲವೆ ಯಾವದನ್ನು ಧರಿಸಿಕೊಳ್ಳಬೇಕು ಎಂದು ಹೇಳುತ್ತಾ ಚಿಂತೆಮಾಡ ಬೇಡಿರಿ.

6:32b.MAT.006.032 (ಯಾಕಂದರೆ ಇವೆಲ್ಲವುಗಳಿಗಾಗಿ ಅನ್ಯಜನರು ತವಕ ಪಡುತ್ತಾರೆ;) ಆದರೆ ಇವೆಲ್ಲವುಗಳು ನಿಮಗೆ ಅಗತ್ಯವಾಗಿವೆ ಎಂದು ಪರಲೋಕದ ನಿಮ್ಮ ತಂದೆಗೆ ತಿಳಿದದೆ.

6:33b.MAT.006.033 ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.

6:34b.MAT.006.034 ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.

7

7:1b.MAT.007.001 ನಿಮಗೆ ತೀರ್ಪು ಆಗದಂತೆ ನೀವೂ ತೀರ್ಪು ಮಾಡಬೇಡಿರಿ.

7:2b.MAT.007.002 ನೀವು ಮಾಡುವ ತೀರ್ಪಿ ನಿಂದಲೇ ನಿಮಗೆ ತೀರ್ಪಾಗುವದು; ಮತ್ತು ನೀವು ಅಳೆಯುವ ಅಳತೆಯಿಂದಲೇ ನಿಮಗೆ ತಿರಿಗಿ ಅಳತೆ ಯಾಗುವದು.

7:3b.MAT.007.003 ಮತ್ತು ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ರವೆಯನ್ನು ನೀನು ಯಾಕೆ ನೋಡುತ್ತೀ?

7:4b.MAT.007.004 ಇಲ್ಲವೆ ನೀನು ನಿನ್ನ ಸಹೋದರನಿಗೆ--ನಿನ್ನ ಕಣ್ಣಿ ನೊಳಗಿಂದ ರವೆಯನ್ನು ತೆಗೆಯುತ್ತೇನೆ ಎಂದು ಹೇಗೆ ಹೇಳುತ್ತೀ? ಆದರೆ ಇಗೋ, ನಿನ್ನ ಸ್ವಂತ ಕಣ್ಣಿನಲ್ಲಿ ತೊಲೆ ಇದೆಯಲ್ಲಾ?

7:5b.MAT.007.005 ಕಪಟಿ ನೀನು, ಮೊದಲು ನಿನ್ನ ಸ್ವಂತ ಕಣ್ಣಿನೊಳಗಿರುವ ತೊಲೆ ಯನ್ನು ತೆಗೆದು ಹಾಕು; ಆಗ ನಿನ್ನ ಸಹೋದರನ ಕಣ್ಣಿನೊಳಗಿರುವ ರವೆಯನ್ನು ತೆಗೆದು ಹಾಕುವದಕ್ಕೆ ನಿನಗೆ ಚೆನ್ನಾಗಿ ಕಾಣಿಸುವದು.

7:6b.MAT.007.006 ನಾಯಿಗಳಿಗೆ ಪವಿತ್ರವಾದದ್ದನ್ನು ಕೊಡಬೇಡಿರಿ ಇಲ್ಲವೆ ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಹಾಕಬೇಡಿರಿ. ಹಾಕಿದರೆ ಅವುಗಳನ್ನು ತುಳಿದು ಬಿಟ್ಟು ಮತ್ತೆ ತಿರುಗಿಕೊಂಡು ನಿಮ್ಮನ್ನು ಹರಿದು ಬಿಟ್ಟಾವು.

7:7b.MAT.007.007 ಬೇಡಿಕೊಳ್ಳಿರಿ, ಅದು ನಿಮಗೆ ಕೊಡಲ್ಪಡುವದು; ಹುಡುಕಿರಿ, ನಿಮಗೆ ಸಿಕ್ಕುವದು; ತಟ್ಟಿರಿ, ಅದು ನಿಮಗೆ ತೆರೆಯಲ್ಪಡುವದು.

7:8b.MAT.007.008 ಯಾಕಂದರೆ ಬೇಡಿ ಕೊಳ್ಳುವ ಪ್ರತಿಯೊಬ್ಬನು ಹೊಂದಿಕೊಳ್ಳುವನು; ಮತ್ತು ಹುಡುಕುವವನಿಗೆ ಸಿಕ್ಕುವದು; ಇದಲ್ಲದೆ ತಟ್ಟುವವನಿಗೆ ತೆರೆಯಲ್ಪಡುವದು.

7:9b.MAT.007.009 ಇಲ್ಲವೆ ತನ್ನ ಮಗನು ರೊಟ್ಟಿಯನ್ನು ಕೇಳಿದರೆ ನಿಮ್ಮಲ್ಲಿ ಯಾವ ನಾದರೂ ಅವನಿಗೆ ಕಲ್ಲನ್ನು ಕೊಡುವನೇ?

7:10b.MAT.007.010 ಇಲ್ಲವೆ ಅವನು ಮಾನನ್ನು ಕೇಳಿದರೆ ತಂದೆಯು ಅವನಿಗೆ ಹಾವನ್ನು ಕೊಡುವನೇ?

7:11b.MAT.007.011 ಕೆಟ್ಟವರಾದ ನೀವು ಒಳ್ಳೇ ದಾನಗಳನ್ನು ನಿಮ್ಮ ಮಕ್ಕಳಿಗೆ ಕೊಡುವದು ಹೇಗೆ ಎಂಬದನ್ನು ತಿಳಿದವರಾಗಿದ್ದರೆ ಪರಲೋಕ ದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳು ವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯವುಗಳನ್ನು ಕೊಡುತ್ತಾನಲ್ಲವೇ?

7:12b.MAT.007.012 ಆದದರಿಂದ ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಇಚ್ಛೈಸುವಿರೋ ಅವುಗಳನ್ನು ನೀವು ಸಹ ಅವರಿಗೆ ಹಾಗೆಯೇ ಮಾಡಿರಿ; ಯಾಕಂದರೆ ಇದೇ ನ್ಯಾಯಪ್ರಮಾಣದ ಮತ್ತು ಪ್ರವಾದಿಗಳ ತಾತ್ಪರ್ಯ.

7:13b.MAT.007.013 ಇಕ್ಕಟ್ಟಾದ ದ್ವಾರದೊಳಗೆ ನೀವು ಪ್ರವೇಶಿಸಿರಿ; ಯಾಕಂದರೆ ನಾಶನಕ್ಕೆ ನಡಿಸುವ ದ್ವಾರವು ಅಗಲವೂ ಮಾರ್ಗವು ವಿಶಾಲವೂ ಆಗಿದೆ. ಅದರೊಳಗೆ ಪ್ರವೇಶಿಸುವವರು ಬಹು ಜನ.

7:14b.MAT.007.014 ಜೀವಕ್ಕೆ ನಡಿಸುವ ದ್ವಾರವು ಇಕ್ಕಟ್ಟಾದದ್ದೂ ದಾರಿಯು ಬಿಕ್ಕಟ್ಟಾದದ್ದೂ ಆಗಿದೆ; ಆದದರಿಂದ ಅದನ್ನು ಕಂಡುಕೊಳ್ಳುವವರು ಸ್ವಲ್ಪ ಜನ.

7:15b.MAT.007.015 ಕುರಿ ವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳಿಗೆ ಎಚ್ಚರವಾಗಿರ್ರಿ; ಯಾಕಂದರೆ ಅವರು ಒಳಗೆ ದೋಚಿಕೊಳ್ಳುವ ತೋಳಗಳಾಗಿದ್ದಾರೆ.

7:16b.MAT.007.016 ಅವರ ಫಲಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ. ಜನರು ಮುಳ್ಳುಗಳಲ್ಲಿ ದ್ರಾಕ್ಷೆಯನ್ನೂ ಮದ್ದುಗುಣಿಕೇಗಿಡಗಳಲ್ಲಿ ಅಂಜೂರ ಗಳನ್ನೂ ಕೂಡಿಸುವರೋ?

7:17b.MAT.007.017 ಅದರಂತೆಯೇ ಪ್ರತಿ ಯೊಂದು ಒಳ್ಳೆ ಮರವು ಒಳ್ಳೇ ಫಲವನ್ನು ಕೊಡುತ್ತದೆ; ಮತ್ತು ಕೆಟ್ಟ ಮರವು ಕೆಟ್ಟ ಫಲವನ್ನು ಕೊಡುತ್ತದೆ;

7:18b.MAT.007.018 ಒಳ್ಳೆ ಮರವು ಕೆಟ್ಟ ಫಲವನ್ನು ಕೊಡಲಾರದು; ಇಲ್ಲವೆ ಕೆಟ್ಟ ಮರವು ಒಳ್ಳೇ ಫಲವನ್ನು ಕೊಡಲಾರದು.

7:19b.MAT.007.019 ಒಳ್ಳೇ ಫಲವನ್ನು ಕೊಡದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿಯಲ್ಲಿ ಹಾಕಲ್ಪಡುತ್ತದೆ.

7:20b.MAT.007.020 ಆದದರಿಂದ ಅವರ ಫಲಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ.

7:21b.MAT.007.021 ಕರ್ತನೇ, ಕರ್ತನೇ ಎಂದು ನನಗೆ ಹೇಳುವ ಪ್ರತಿಯೊಬ್ಬನು ಪರಲೋಕರಾಜ್ಯದಲ್ಲಿ ಪ್ರವೇಶಿಸು ವದಿಲ್ಲ; ಆದರೆ ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ಅದರಲ್ಲಿ ಪ್ರವೇಶಿ ಸುವನು.

7:22b.MAT.007.022 ಆ ದಿನದಲ್ಲಿ--ಕರ್ತನೇ, ಕರ್ತನೇ ನಿನ್ನ ಹೆಸರಿನಲ್ಲಿ ನಾವು ಪ್ರವಾದಿಸಲಿಲ್ಲವೇ? ಮತ್ತು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ಇದಲ್ಲದೆ ನಿನ್ನ ಹೆಸರಿನಲ್ಲಿ ಬಹಳ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ಬಹಳ ಜನರು ನನಗೆ ಹೇಳುವರು.

7:23b.MAT.007.023 ಆಗ ನಾನು ಅವರಿಗೆ--ನಾನು ನಿಮ್ಮನ್ನು ಎಂದಿಗೂ ಅರಿಯೆನು; ದುಷ್ಟತನ ಮಾಡುವ ನೀವು ನನ್ನಿಂದ ತೊಲಗಿ ಹೋಗಿರಿ ಎಂದು ಹೇಳಿಬಿಡುವೆನು.

7:24b.MAT.007.024 ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು.

7:25b.MAT.007.025 ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆದರೂ ಅದು ಬೀಳಲಿಲ್ಲ; ಯಾಕಂದರೆ ಅದರ ಅಸ್ತಿವಾರವು ಬಂಡೆಯ ಮೇಲೆ ಹಾಕಲ್ಪಟ್ಟಿತು.

7:26b.MAT.007.026 ಈ ನನ್ನ ಮಾತುಗಳನ್ನು ಕೇಳುವ ಪ್ರತಿಯೊಬ್ಬನು ಅವುಗಳಂತೆ ನಡೆಯದೆ ಹೋದರೆ ಅವನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿಹೀನನಿಗೆ ಹೋಲಿಕೆಯಾಗಿರುವನು.

7:27b.MAT.007.027 ಹೇಗಂದರೆ ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆಗ ಅದು ಬಿತ್ತು; ಮತ್ತು ಅದರ ಬೀಳುವಿಕೆಯು ದೊಡ್ಡದಾಗಿತ್ತು.

7:28b.MAT.007.028 ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ತರುವಾಯ ಜನರು ಆತನ ಬೋಧನೆಗೆ ಆಶ್ಚರ್ಯ ಪಟ್ಟರು.ಯಾಕಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಆಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು.

7:29b.MAT.007.029 ಯಾಕಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಆಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು.

8

8:1b.MAT.008.001 ಆತನು ಪರ್ವತವನ್ನಿಳಿದು ಬಂದಾಗ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.

8:2b.MAT.008.002 ಆಗ ಇಗೋ, ಒಬ್ಬ ಕುಷ್ಠರೋಗಿಯು ಬಂದು ಆತನನ್ನು ಆರಾಧಿಸಿ--ಕರ್ತನೇ, ನಿನಗೆ ಮನಸ್ಸಿದ್ದರೆ ನೀನು ನನ್ನನ್ನು ಶುದ್ಧ ಮಾಡಬಲ್ಲೆ ಅಂದನು.

8:3b.MAT.008.003 ಆಗ ಯೇಸು ತನ್ನ ಕೈಯನ್ನು ಚಾಚಿ ಅವನನ್ನು ಮುಟ್ಟಿ--ನನಗೆ ಮನಸ್ಸುಂಟು; ನೀನು ಶುದ್ಧನಾಗು ಅಂದನು. ತಕ್ಷಣವೇ ಅವನ ಕುಷ್ಠವು ಹೋಗಿ ಅವನು ಶುದ್ಧನಾದನು.

8:4b.MAT.008.004 ಯೇಸು ಅವನಿಗೆ--ನೀನು ಯಾರಿಗೂ ಹೇಳಬೇಡ ನೋಡು; ಹೊರಟುಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಅವರಿಗೆ ಸಾಕ್ಷಿಯಾಗಿರುವಂತೆ ಮೋಶೆಯು ಆಜ್ಞಾಪಿಸಿದ ಕಾಣಿಕೆಯನ್ನು ಅರ್ಪಿಸು ಎಂದು ಹೇಳಿದನು.

8:5b.MAT.008.005 ಇದಾದ ಮೇಲೆ ಯೇಸು ಕಪೆರ್ನೌಮಿನಲ್ಲಿ ಪ್ರವೇಶಿಸಿದಾಗ ಒಬ್ಬ ಶತಾಧಿಪತಿಯು ಆತನ ಬಳಿಗೆ ಬಂದು--

8:6b.MAT.008.006 ಕರ್ತನೇ, ನನ್ನ ಸೇವಕನು ಪಾರ್ಶ್ವವಾಯು ರೋಗದಿಂದ ಬಹಳವಾಗಿ ಸಂಕಟಪಡುತ್ತಾ ಮನೆ ಯಲ್ಲಿ ಮಲಗಿದ್ದಾನೆ ಎಂದು ಹೇಳಿ ಬೇಡಿಕೊಂಡನು.

8:7b.MAT.008.007 ಯೇಸು ಅವನಿಗೆ--ನಾನು ಬಂದು ಅವನನ್ನು ಸ್ವಸ್ಥಮಾಡುತ್ತೇನೆ ಅಂದನು.

8:8b.MAT.008.008 ಅದಕ್ಕೆ ಶತಾಧಿಪತಿಯು ಪ್ರತ್ಯುತ್ತರವಾಗಿ--ಕರ್ತನೇ, ನೀನು ನನ್ನ ಮನೆ ಯೊಳಗೆ ಬರುವದಕ್ಕೆ ನಾನು ಯೋಗ್ಯನಲ್ಲ; ಆದರೆ ನೀನು ಒಂದು ಮಾತು ಮಾತ್ರ ಹೇಳು, ಆಗ ನನ್ನ ಸೇವಕನು ಸ್ವಸ್ಥನಾಗುವನು.

8:9b.MAT.008.009 ಯಾಕಂದರೆ ನಾನು ಅಧಿಕಾರದ ಕೆಳಗಿರುವ ಒಬ್ಬ ಮನುಷ್ಯನಾಗಿದ್ದರೂ ನನ್ನ ಅಧೀನದಲ್ಲಿ ಸೈನಿಕರಿದ್ದಾರೆ; ಮತ್ತು ನಾನು ಇವನಿಗೆ--ಹೋಗು ಅಂದರೆ ಇವನು ಹೋಗುತ್ತಾನೆ; ಮತ್ತೊಬ್ಬನಿಗೆ--ಬಾ ಅಂದರೆ ಅವನು ಬರುತ್ತಾನೆ; ಮತ್ತು ನನ್ನ ಸೇವಕನಿಗೆ--ಇದನ್ನು ಮಾಡು ಎಂದು ಹೇಳಿದರೆ ಅವನು ಮಾ

8:10b.MAT.008.010 ಯೇಸು ಅದನ್ನು ಕೇಳಿ ಆಶ್ಚರ್ಯಪಟ್ಟು ತನ್ನ ಹಿಂದೆ ಬರುತ್ತಿದ್ದವರಿಗೆ--ನಾನು ಇಂಥಾ ದೊಡ್ಡ ನಂಬಿಕೆಯನ್ನು ಕಾಣಲಿಲ್ಲ, ಇಸ್ರಾಯೇಲಿನಲ್ಲಿಯೂ ಕಾಣಲಿಲ್ಲ ಎಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.

8:11b.MAT.008.011 ನಾನು ನಿಮಗೆ ಹೇಳುವದೇನಂದರೆ--ಬಹಳ ಜನರು ಪೂರ್ವದಿಂದಲೂ ಪಶ್ಚಿಮದಿಂದಲೂ ಬಂದು ಪರ ಲೋಕರಾಜ್ಯದಲ್ಲಿ ಅಬ್ರಹಾಮ್‌ ಇಸಾಕ್‌ ಯಾಕೋಬ್‌ ಅವರೊಂದಿಗೆ ಕೂತುಕೊಳ್ಳುವರು.

8:12b.MAT.008.012 ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಯಲ್ಲಿ ದೊಬ್ಬಲ್ಪಡುವರು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.

8:13b.MAT.008.013 ಯೇಸು ಆ ಶತಾಧಿಪತಿಗೆ--ಹೋಗು, ನೀನು ನಂಬಿದಂತೆಯೇ ನಿನಗಾಗಲಿ ಎಂದು ಹೇಳಿದನು. ಮತ್ತು ಅವನ ಸೇವಕನು ಅದೇ ಗಳಿಗೆಯಲ್ಲಿ ಸ್ವಸ್ಥನಾದನು.

8:14b.MAT.008.014 ಇದಾದ ಮೇಲೆ ಯೇಸು ಪೇತ್ರನ ಮನೆಗೆ ಬಂದು ಅವನ ಹೆಂಡತಿಯ ತಾಯಿಯು ಜ್ವರದಿಂದ ಮಲಗಿರುವದನ್ನು ಕಂಡನು.

8:15b.MAT.008.015 ಆತನು ಆಕೆಯ ಕೈಯನ್ನು ಮುಟ್ಟಿದಾಗ ಜ್ವರವು ಆಕೆಯನ್ನು ಬಿಟ್ಟಿತು; ಮತ್ತು ಆಕೆಯು ಎದ್ದು ಅವರಿಗೆ ಉಪಚಾರ ಮಾಡಿದಳು.

8:16b.MAT.008.016 ಸಾಯಂಕಾಲವಾದಾಗ ದೆವ್ವಗಳು ಹಿಡಿದಿದ್ದ ಬಹಳ ಜನರನ್ನು ಅವರು ಆತನ ಬಳಿಗೆ ತಂದರು; ಮತ್ತು ಆತನು ತನ್ನ ಮಾತಿನಿಂದ ದೆವ್ವಗಳನ್ನು ಬಿಡಿಸಿ ದ್ದಲ್ಲದೆ ಅಸ್ವಸ್ಥವಾಗಿದ್ದವರೆಲ್ಲರನ್ನೂ ಸ್ವಸ್ಥ ಮಾಡಿದನು.

8:17b.MAT.008.017 ಹೀಗೆ--ಆತನು ತಾನೇ ನಮ್ಮ ಬಲಹೀನತೆಗಳನ್ನು ತಕ್ಕೊಂಡು ರೋಗಗಳನ್ನು ಹೊತ್ತನು ಎಂಬದಾಗಿ ಪ್ರವಾದಿಯಾದ ಯೆಶಾಯನಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಇದಾಯಿತು.

8:18b.MAT.008.018 ಇದಾದಮೇಲೆ ಯೇಸು ತನ್ನ ಸುತ್ತಲೂ ಇದ್ದ ಜನರ ದೊಡ್ಡ ಸಮೂಹಗಳನ್ನು ನೋಡಿ ಆಚೆಕಡೆಗೆ ಹೊರಟುಹೋಗುವಂತೆ ಅಪ್ಪಣೆ ಕೊಟ್ಟನು.

8:19b.MAT.008.019 ಆಗ ಒಬ್ಬ ಶಾಸ್ತ್ರಿಯು ಬಂದು ಆತನಿಗೆ--ಬೋಧಕನೇ, ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿ ಸುವೆನು ಅಂದನು.

8:20b.MAT.008.020 ಅದಕ್ಕೆ ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ, ಆಕಾಶದ ಪಕ್ಷಿಗಳಿಗೆ ಗೂಡು ಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆಯಿಡು ವದಕ್ಕೂ ಸ್ಥಳವಿಲ್ಲ ಎಂದು ಹೇಳಿದನು.

8:21b.MAT.008.021 ಆತನ ಶಿಷ್ಯರಲ್ಲಿ ಮತ್ತೊಬ್ಬನು ಆತನಿಗೆ--ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯನ್ನು ಹೂಣಿಟ್ಟು ಬರುವಂತೆ ನನಗೆ ಅಪ್ಪಣೆ ಕೊಡು ಎಂದು ಹೇಳಿದನು.

8:22b.MAT.008.022 ಆದರೆ ಯೇಸು ಅವನಿಗೆ--ನನ್ನನ್ನು ಹಿಂಬಾಲಿಸು; ಸತ್ತವರು ತಮ್ಮ ಸತ್ತವರನ್ನು ಹೂಣಿಡಲಿ ಎಂದು ಹೇಳಿದನು.

8:23b.MAT.008.023 ಆತನು ದೋಣಿಯನ್ನು ಹತ್ತಿದಾಗ ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು.

8:24b.MAT.008.024 ಆಗ ಇಗೋ, ಸಮುದ್ರದಲ್ಲಿ ದೊಡ್ಡ ತುಫಾನು ಎದ್ದ ಕಾರಣ ದೋಣಿಯು ತೆರೆಗಳಿಂದ ಮುಚ್ಚಲ್ಪಟ್ಟಿತು; ಆದರೆ ಆತನು ನಿದ್ರಿಸುತ್ತಿದ್ದನು.

8:25b.MAT.008.025 ಆಗ ಆತನ ಶಿಷ್ಯರು ಬಂದು ಆತನನ್ನು ಎಬ್ಬಿಸಿ--ಕರ್ತನೇ ನಮ್ಮನ್ನು ರಕ್ಷಿಸು; ನಾವು ನಾಶವಾಗುತ್ತೇವೆ ಅಂದರು.

8:26b.MAT.008.026 ಆಗ ಆತನು ಅವರಿಗೆ--ಓ ಅಲ್ಪ ವಿಶ್ವಾಸಿಗಳೇ, ನೀವು ಯಾಕೆ ಭಯಪಡುತ್ತೀರಿ ಎಂದು ಹೇಳಿ ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು. ಆಗ ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು.

8:27b.MAT.008.027 ಆದರೆ ಅವರು ಆಶ್ಚರ್ಯದಿಂದ--ಈತನು ಎಂಥಾ ಮನುಷ್ಯ ನಾಗಿರಬಹುದು! ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ ಅಂದರು.

8:28b.MAT.008.028 ಆತನು ಆಚೆಯ ದಡದ ಗದರೇನರ ದೇಶಕ್ಕೆ ಬಂದಾಗ ದೆವ್ವಗಳು ಹಿಡಿದಿದ್ದ ಇಬ್ಬರು ಸಮಾಧಿ ಗಳೊಳಗಿಂದ ಆತನ ಎದುರಿಗೆ ಬಂದರು. ಅವರು ಬಹು ಉಗ್ರತೆಯುಳ್ಳವರಾಗಿದ್ದದರಿಂದ ಯಾವ ಮನು ಷ್ಯನೂ ಆ ಮಾರ್ಗವಾಗಿ ಹೋಗುವ ಹಾಗಿದ್ದಿಲ್ಲ.

8:29b.MAT.008.029 ಆಗ ಇಗೋ, ಅವರು--ಯೇಸುವೇ, ದೇವ ಕುಮಾರನೇ, ನಿನ್ನೊಂದಿಗೆ ನಮ್ಮ ಗೊಡವೆ ಏನು? ಸಮಯಕ್ಕೆ ಮುಂಚೆ ನಮ್ಮನ್ನು ಸಂಕಟಪಡಿಸು ವದಕ್ಕಾಗಿ ಇಲ್ಲಿಗೆ ಬಂದೆಯಾ ಎಂದು ಕೂಗಿ ಹೇಳಿದರು.

8:30b.MAT.008.030 ಆಗ ಅವರಿಗೆ ಬಹು ದೂರದಲ್ಲಿ ಬಹಳ ಹಂದಿಗಳ ಗುಂಪು ಮೇಯುತ್ತಿತ್ತು.

8:31b.MAT.008.031 ಆದದರಿಂದ ದೆವ್ವಗಳು ಆತನಿಗೆ--ನೀನು ನಮ್ಮನ್ನು ಹೊರಗೆ ಹಾಕುವದಾದರೆ ಆ ಹಂದಿಗಳ ಗುಂಪಿನೊಳಗೆ ಸೇರಿಕೊಳ್ಳುವದಕ್ಕೆ ನಮಗೆ ಅಪ್ಪಣೆ ಕೊಡು ಎಂದು ಬೇಡಿಕೊಂಡವು.

8:32b.MAT.008.032 ಆತನು ಅವುಗಳಿಗೆ--ಹೋಗಿರಿ ಅಂದನು. ಆಗ ಅವು ಹೊರಗೆ ಬಂದು ಹಂದಿಗಳ ಗುಂಪಿನೊಳಗೆ ಸೇರಿಕೊಂಡವು; ಆಗ ಇಗೋ, ಹಂದಿಗಳ ಗುಂಪೆಲ್ಲಾ ಸಮುದ್ರದ ಕಡಿದಾದ ಸ್ಥಳಕ್ಕೆ ಉಗ್ರವಾಗಿ ಓಡಿಹೋಗಿ ನೀರಿನಲ್ಲಿ ಬಿದ್ದು ಸತ್ತು ಹೋದವು.

8:33b.MAT.008.033 ಮತ್ತು ಅವುಗಳನ್ನು ಕಾಯುತ್ತಿದ್ದವರು ಪಟ್ಟಣ ದೊಳಕ್ಕೆ ಓಡಿಹೋಗಿ ಎಲ್ಲವನ್ನೂ ದೆವ್ವಗಳು ಹಿಡಿದಿದ್ದವರಿಗೆ ಸಂಭವಿಸಿದ್ದನ್ನೂ ತಿಳಿಯಪಡಿಸಿದರು.ಆಗ ಇಗೋ, ಪಟ್ಟಣದವರೆಲ್ಲರು ಯೇಸುವನ್ನು ಸಂಧಿಸುವದಕ್ಕೆ ಹೊರಗೆ ಬಂದರು; ಮತ್ತು ಅವರು ಆತನನ್ನು ನೋಡಿ ತಮ್ಮ ಮೇರೆಗಳನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು.

8:34b.MAT.008.034 ಆಗ ಇಗೋ, ಪಟ್ಟಣದವರೆಲ್ಲರು ಯೇಸುವನ್ನು ಸಂಧಿಸುವದಕ್ಕೆ ಹೊರಗೆ ಬಂದರು; ಮತ್ತು ಅವರು ಆತನನ್ನು ನೋಡಿ ತಮ್ಮ ಮೇರೆಗಳನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು.

9

9:1b.MAT.009.001 ಆಗ ಆತನು ದೋಣಿಯನ್ನು ಹತ್ತಿ ಅಲ್ಲಿಂದ ಹೊರಟು ತನ್ನ ಸ್ವಂತ ಪಟ್ಟಣಕ್ಕೆ ಬಂದನು.

9:2b.MAT.009.002 ಇಗೋ, ಹಾಸಿಗೆಯ ಮೇಲೆ ಮಲಗಿದ್ದ ಒಬ್ಬ ಪಾರ್ಶ್ವವಾಯು ರೋಗಿಯನ್ನು ಜನರು ಆತನ ಬಳಿಗೆ ತಂದರು; ಮತ್ತು ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ--ಮಗನೇ, ಧೈರ್ಯವಾಗಿರು, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅಂದನು.

9:3b.MAT.009.003 ಆಗ ಇಗೋ, ಶಾಸ್ತ್ರಿಗಳಲ್ಲಿ ಕೆಲವರು-- ಈ ಮನುಷ್ಯನು ದೇವದೂಷಣೆ ಮಾಡುತ್ತಾನೆ ಎಂದು ತಮ್ಮತಮ್ಮಲ್ಲಿ ಅಂದುಕೊಂಡರು.

9:4b.MAT.009.004 ಯೇಸು ಅವರ ಆಲೋಚನೆಗಳನ್ನು ತಿಳಿದು--ನೀವು ಯಾಕೆ ನಿಮ್ಮ ಹೃದಯಗಳಲ್ಲಿ ಕೆಟ್ಟದ್ದನ್ನು ಯೋಚಿಸುತ್ತೀರಿ?

9:5b.MAT.009.005 ಯಾವದು ಸುಲಭ--ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಅನ್ನುವದೋ? ಇಲ್ಲವೆ--ಎದ್ದು ನಡೆ ಅನ್ನುವದೋ?

9:6b.MAT.009.006 ಆದರೆ ಮನುಷ್ಯಕುಮಾರನಿಗೆ ಪಾಪ ಗಳನ್ನು ಕ್ಷಮಿಸಿಬಿಡುವದಕ್ಕೆ ಭೂಮಿಯ ಮೇಲೆ ಅಧಿಕಾರ ಉಂಟೆಂದು ನೀವು ತಿಳಿಯಬೇಕು ಎಂದು ಹೇಳಿ ಆ ಪಾರ್ಶ್ವವಾಯು ರೋಗಿಗೆ--ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗು ಎಂದು ಹೇಳಿದನು.

9:7b.MAT.009.007 ಆಗ ಅವನು ಎದ್ದು ತನ್ನ ಮನೆಗೆ ಹೊರಟುಹೋದನು.

9:8b.MAT.009.008 ಆದರೆ ಜನರ ಸಮೂಹಗಳು ಅದನ್ನು ನೋಡಿ ಆಶ್ಚರ್ಯಪಟ್ಟು ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟ ದೇವರನ್ನು ಮಹಿಮೆಪಡಿಸಿದರು.

9:9b.MAT.009.009 ತರುವಾಯ ಯೇಸು ಅಲ್ಲಿಂದ ಹಾದು ಹೋಗು ತ್ತಿದ್ದಾಗ ಮತ್ತಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಸುಂಕದ ಕಟ್ಟೆಯಲ್ಲಿ ಕೂತಿರುವದನ್ನು ನೋಡಿ ಅವ ನಿಗೆ--ನನ್ನನ್ನು ಹಿಂಬಾಲಿಸು ಅನ್ನಲು ಅವನು ಎದ್ದು ಆತನನ್ನು ಹಿಂಬಾಲಿಸಿದನು.

9:10b.MAT.009.010 ಇದಾದ ಮೇಲೆ ಯೇಸು ಅವನ ಮನೆಯಲ್ಲಿ ಊಟಕ್ಕೆ ಕೂತಿದ್ದಾಗ ಇಗೋ, ಬಹುಮಂದಿ ಸುಂಕ ದವರೂ ಪಾಪಿಗಳೂ ಬಂದು ಆತನೊಂದಿಗೂ ಆತನ ಶಿಷ್ಯರೊಂದಿಗೂ ಕೂತುಕೊಂಡರು.

9:11b.MAT.009.011 ಫರಿಸಾ ಯರು ಅದನ್ನು ನೋಡಿ ಆತನ ಶಿಷ್ಯರಿಗೆ--ನಿಮ್ಮ ಬೋಧಕನು ಸುಂಕದವರ ಮತ್ತು ಪಾಪಿಗಳ ಸಂಗಡ ಯಾಕೆ ಊಟ ಮಾಡುತ್ತಾನೆ ಎಂದು ಕೇಳಿದರು.

9:12b.MAT.009.012 ಆದರೆ ಯೇಸು ಅದನ್ನು ಕೇಳಿ ಅವರಿಗೆ--ಕ್ಷೇಮದಿಂದಿರುವವರಿಗೆ ಅಲ್ಲ, ಆದರೆ ಕ್ಷೇಮವಿಲ್ಲದವ ರಿಗೆ ವೈದ್ಯನು ಬೇಕು.

9:13b.MAT.009.013 ನೀವು ಹೋಗಿ--ನಾನು ಯಜ್ಞವನ್ನಲ್ಲ; ಕರುಣೆಯನ್ನೇ ಅಪೇಕ್ಷಿಸುತ್ತೇನೆ ಎಂಬದರ ಅರ್ಥವನ್ನು ಕಲಿಯಿರಿ; ಯಾಕಂದರೆ ನಾನು ನೀತಿ ವಂತರನ್ನಲ್ಲ, ಪಾಪಿಗಳನ್ನು ಮಾನಸಾಂತರಪಡು ವದಕ್ಕಾಗಿ ಕರೆಯಲು ಬಂದೆನು ಎಂದು ಹೇಳಿದನು.

9:14b.MAT.009.014 ತರುವಾಯ ಯೋಹಾನನ ಶಿಷ್ಯರು ಆತನ ಬಳಿಗೆ ಬಂದು--ನಾವು ಮತ್ತು ಫರಿಸಾಯರು ಬಹಳ ಸಾರಿ ಉಪವಾಸಮಾಡುತ್ತೇವೆ; ಆದರೆ ನಿನ್ನ ಶಿಷ್ಯರು ಯಾಕೆ ಉಪವಾಸಮಾಡುವದಿಲ್ಲ ಎಂದು ಕೇಳಿದರು.

9:15b.MAT.009.015 ಅದಕ್ಕೆ ಯೇಸು ಅವರಿಗೆ--ಮದಲಿಂಗನು ತಮ್ಮ ಜೊತೆಯಲ್ಲಿರುವ ತನಕ ಮದಲಗಿತ್ತಿಯ ಮನೇ ಮಕ್ಕಳು ದುಃಖಪಡುವರೇ? ಆದರೆ ಮದಲಿಂಗನು ಅವರಿಂದ ತೆಗೆಯಲ್ಪಡುವ ದಿವಸಗಳು ಬರುವವು; ಆಗ ಅವರು ಉಪವಾಸ ಮಾಡುವರು.

9:16b.MAT.009.016 ಯಾವನೂ ಹಳೇ ಬಟ್ಟೆಗೆ ಹೊಸ ಬಟ್ಟೆಯ ತುಂಡನ್ನು ಹಚ್ಚುವದಿಲ್ಲ; ಹಚ್ಚಿದರೆ ಅದು ಆ ವಸ್ತ್ರವನ್ನು ಹಿಂಜುವದರಿಂದ ಹರಕು ಹೆಚ್ಚಾಗು ವದು.

9:17b.MAT.009.017 ಇಲ್ಲವೆ ಹೊಸ ದ್ರಾಕ್ಷಾರಸವನ್ನು ಹಳೇ ಬುದ್ದಲಿಗಳಲ್ಲಿ ಜನರು ಹಾಕುವದಿಲ್ಲ; ಹಾಕಿದರೆ ಅವು ಒಡೆದು ದ್ರಾಕ್ಷಾರಸವು ಚೆಲ್ಲಿಹೋಗಿ ಬುದ್ದಲಿಗಳು ನಾಶವಾಗುವವು; ಆದರೆ ಅವರು ಹೊಸ ದ್ರಾಕ್ಷಾ ರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕುವರು; ಆಗ ಅವೆರಡೂ ಭದ್ರವಾಗಿರುವವು ಅಂದನು.

9:18b.MAT.009.018 ಆತನು ಈ ವಿಷಯಗಳನ್ನು ಅವರೊಂದಿಗೆ ಮಾತನಾಡುತ್ತಿದ್ದಾಗ ಇಗೋ, ಒಬ್ಬ ಅಧಿಕಾರಿಯು ಬಂದು ಆತನನ್ನು ಆರಾಧಿಸಿ--ನನ್ನ ಮಗಳು ಇದೀಗಲೇ ಸತ್ತು ಹೋಗಿರುವಳು; ಆದರೆ ನೀನು ಬಂದು ಆಕೆಯ ಮೇಲೆ ನಿನ್ನ ಕೈಯನ್ನಿಡು; ಆಗ ಅವಳು ಬದುಕುವಳು ಎಂದು ಹೇಳಿದನು.

9:19b.MAT.009.019 ಆಗ ಯೇಸು ಎದ್ದು ತನ್ನ ಶಿಷ್ಯರೊಂದಿಗೆ ಅವನ ಹಿಂದೆ ಹೋದನು.

9:20b.MAT.009.020 ಆಗ ಇಗೋ, ಹನ್ನೆರಡು ವರುಷಗಳಿಂದಲೂ ರಕ್ತಸ್ರಾವ ರೋಗವಿದ್ದ ಒಬ್ಬ ಸ್ತ್ರೀಯು ಹಿಂದೆ ಬಂದು ಆತನ ಉಡುಪಿನ ಅಂಚನ್ನು ಮುಟ್ಟಿದಳು.

9:21b.MAT.009.021 ಯಾಕಂದರೆ--ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ಗುಣವಾಗುವೆನು ಎಂದು ಆಕೆಯು ತನ್ನೊಳಗೆ ಅಂದುಕೊಂಡಿದ್ದಳು.

9:22b.MAT.009.022 ಆದರೆ ಯೇಸು ಹಿಂತಿರುಗಿ ಆಕೆಯನ್ನು ನೋಡಿ--ಮಗಳೇ, ಸಮಾಧಾನದಿಂದಿರು; ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥ ಮಾಡಿಯದೆ ಅಂದನು. ಅದೇ ಗಳಿಗೆಯಲ್ಲಿ ಆ ಸ್ತ್ರೀಯು ಸ್ವಸ್ಥಳಾದಳು.

9:23b.MAT.009.023 ತರುವಾಯ ಯೇಸು ಆ ಅಧಿಕಾರಿಯ ಮನೆ ಯೊಳಗೆ ಬಂದು ಕೊಳಲೂದುವವರನ್ನೂ ಗೊಂದಲ ಮಾಡುವ ಜನರನ್ನೂ ನೋಡಿ

9:24b.MAT.009.024 ಅವರಿಗೆ--ಸ್ಥಳ ಬಿಡಿರಿ; ಯಾಕಂದರೆ ಹುಡುಗಿಯು ಸತ್ತಿಲ್ಲ, ನಿದ್ರೆ ಮಾಡುತ್ತಾಳೆ ಅಂದನು. ಅದಕ್ಕವರು ಆತನನ್ನು ಹಾಸ್ಯ ಮಾಡಿ ನಕ್ಕರು.

9:25b.MAT.009.025 ಆದರೆ ಜನರು ಹೊರಗೆ ಹಾಕಲ್ಪಟ್ಟ ಮೇಲೆ ಆತನು ಒಳಗೆ ಹೋಗಿ ಆಕೆಯ ಕೈಯನ್ನು ಹಿಡಿದಾಗ ಆಕೆಯು ಎದ್ದಳು.

9:26b.MAT.009.026 ಇದರ ಕೀರ್ತಿಯು ಆ ದೇಶದಲ್ಲೆಲ್ಲಾ ಹರಡಿತು.

9:27b.MAT.009.027 ಯೇಸು ಅಲ್ಲಿಂದ ಹೊರಟಾಗ ಇಬ್ಬರು ಕುರುಡರು ಆತನನ್ನು ಹಿಂಬಾಲಿಸುತ್ತಾ--ದಾವೀದ ಕುಮಾರನೇ, ನಮ್ಮ ಮೇಲೆ ಕರುಣೆ ಇಡು ಎಂದು ಕೂಗಿ ಹೇಳುತ್ತಿದ್ದರು.

9:28b.MAT.009.028 ಆತನು ಮನೆಯೊಳಕ್ಕೆ ಬಂದಾಗ ಆ ಕುರುಡರು ಆತನ ಬಳಿಗೆ ಬಂದರು; ಆಗ ಯೇಸು ಅವರಿಗೆ--ನಾನು ಇದನ್ನು ಮಾಡಲು ಶಕ್ತನೆಂದು ನೀವು ನಂಬುತ್ತೀರೋ ಎಂದು ಕೇಳಿದಾಗ ಅವರು ಆತನಿಗೆ--ಕರ್ತನೇ, ಹೌದು ಎಂದು ಅಂದರು.

9:29b.MAT.009.029 ಆಗ ಆತನು ಅವರ ಕಣ್ಣುಗಳನ್ನು ಮುಟ್ಟಿ--ನಿಮ್ಮ ನಂಬಿಕೆಯಂತೆ ನಿಮಗಾಗಲಿ ಎಂದು ಹೇಳಿದನು.

9:30b.MAT.009.030 ಆಗ ಅವರ ಕಣ್ಣುಗಳು ತೆರೆಯಲ್ಪಟ್ಟವು; ಮತ್ತು ಯೇಸು ಅವರಿಗೆ--ಇದು ಯಾರಿಗೂ ಗೊತ್ತಾಗಬಾರದು ನೋಡಿರಿ ಎಂದು ಅವರಿಗೆ ಖಂಡಿತವಾಗಿ ಅಪ್ಪಣೆಕೊಟ್ಟು ಹೇಳಿದನು.

9:31b.MAT.009.031 ಆದರೆ ಅವರು ಹೊರಟುಹೋಗಿ ಆ ಸೀಮೆಯಲ್ಲೆಲ್ಲಾ ಆತನ ಕೀರ್ತಿಯನ್ನು ಹಬ್ಬಿಸಿದರು.

9:32b.MAT.009.032 ಅವರು ಹೊರಟು ಹೋಗುತ್ತಿದ್ದಾಗ ಇಗೋ, ದೆವ್ವ ಹಿಡಿದಿದ್ದ ಮೂಕನಾದ ಒಬ್ಬ ಮನುಷ್ಯನನ್ನು ಅವರು ಆತನ ಬಳಿಗೆ ತಂದರು.

9:33b.MAT.009.033 ಮತ್ತು ದೆವ್ವವು ಹೊರಗೆ ಹಾಕಲ್ಪಟ್ಟ ಮೇಲೆ ಮೂಕನು ಮಾತಾಡಿದನು; ಆಗ ಜನಸಮೂಹಗಳವರು ಬೆರ ಗಾಗಿ--ಇಂಥದ್ದು ಎಂದೂ ಇಸ್ರಾಯೇಲಿನಲ್ಲಿ ಕಂಡಿಲ್ಲ ಎಂದು ಹೇಳಿದರು.

9:34b.MAT.009.034 ಆದರೆ ಪರಿಸಾಯರು-- ದೆವ್ವಗಳ ಅಧಿಪತಿಯಿಂದ ಇವನು ದೆವ್ವಗಳನ್ನು ಬಿಡಿಸುತ್ತಾನೆ ಅಂದರು.

9:35b.MAT.009.035 ತರುವಾಯ ಯೇಸು ಎಲ್ಲಾ ಹಳ್ಳಿಗಳಲ್ಲಿಯೂ ಪಟ್ಟಣಗಳಲ್ಲಿಯೂ ಸಂಚರಿ ಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಿಸುತಾ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಪ್ರತಿಯೊಂದು ಅಸ್ವಸ್ಥತೆಯನ್ನೂ ರೋಗವನ್ನೂ ವಾಸಿಮಾಡಿದರು.

9:36b.MAT.009.036 ಆದರೆ ಆತನು ಜನರ ಸಮೂಹಗಳನ್ನು ಕಂಡು ಅವರ ಮೇಲೆ ಕನಿಕರಪಟ್ಟನು; ಯಾಕಂದರೆ ಅವರು ಕುರುಬನಿಲ್ಲದ ಕುರಿಗಳಂತೆ ಚದರಿಸಲ್ಪಟ್ಟು ಬಳಲಿದವರಾಗಿದ್ದರು.

9:37b.MAT.009.037 ಆಗ ಆತನು ತನ್ನ ಶಿಷ್ಯ ರಿಗೆ--ಬೆಳೆಯು ನಿಜವಾಗಿಯೂ ಬಹಳ; ಆದರೆ ಕೆಲಸದವರು ಸ್ವಲ್ಪ.ಆದದರಿಂದ ಬೆಳೆಯ ಯಜ ಮಾನನು ಕೆಲಸಗಾರರನ್ನು ತನ್ನ ಬೆಳೆಗೆ ಕಳುಹಿಸುವಂತೆ ಆತನನ್ನು ಪ್ರಾರ್ಥಿಸಿರಿ ಅಂದನು.

9:38b.MAT.009.038 ಆದದರಿಂದ ಬೆಳೆಯ ಯಜ ಮಾನನು ಕೆಲಸಗಾರರನ್ನು ತನ್ನ ಬೆಳೆಗೆ ಕಳುಹಿಸುವಂತೆ ಆತನನ್ನು ಪ್ರಾರ್ಥಿಸಿರಿ ಅಂದನು.

10

10:1b.MAT.010.001 ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ತನ್ನ ಬಳಿಗೆ ಕರೆದು ಅಶುದ್ಧಾತ್ಮಗಳನ್ನು ಬಿಡಿಸುವಂತೆಯೂ ಎಲ್ಲಾ ತರವಾದ ರೋಗವನ್ನು ಮತ್ತು ಎಲ್ಲಾ ತರವಾದ ಅಸ್ವಸ್ಥತೆಯನ್ನು ಸ್ವಸ್ಥ ಮಾಡು ವಂತೆಯೂ ಅವರಿಗೆ ಅಧಿಕಾರ ಕೊಟ್ಟನು.

10:2b.MAT.010.002 ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು: ಮೊದಲನೆಯವನು ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ, ಜೆಬೆದಾಯನ ಮಗನಾದ ಯಾಕೋಬ ಮತ್ತು ಅವನ ಸಹೋದರನಾದ ಯೋಹಾನ,

10:3b.MAT.010.003 ಫಿಲಿಪ್ಪ, ಬಾರ್ತೊ ಲೊಮಾಯ, ತೋಮ, ಸುಂಕದವನಾದ ಮತ್ತಾಯ ಅಲ್ಫಾಯನ ಮಗನಾದ ಯಾಕೋಬ, ತದ್ದಾಯನೆಂಬ ಅಡ್ಡ ಹೆಸರಿನ ಲೆಬ್ಬಾಯ,

10:4b.MAT.010.004 ಕಾನಾನ್ಯನಾದ ಸೀಮೋನ ಮತ್ತು ಆತನನ್ನು ಹಿಡಿದುಕೊಟ್ಟ ಯೂದ ಇಸ್ಕರಿಯೋತ ಎಂಬಿವುಗಳೇ.

10:5b.MAT.010.005 ಯೇಸು ಈ ಹನ್ನೆರಡು ಮಂದಿಯನ್ನು ಕಳುಹಿ ಸುವಾಗ ಅವರಿಗೆ ಅಪ್ಪಣೆಕೊಟ್ಟು ಹೇಳಿದ್ದೇನಂ ದರೆ--ಅನ್ಯಜನರ ದಾರಿಯಲ್ಲಿ ಹೋಗಬೇಡಿರಿ ಮತ್ತು ಸಮಾರ್ಯರ ಯಾವ ಪಟ್ಟಣದಲ್ಲಿಯೂ ನೀವು ಪ್ರವೇಶಿಸಬೇಡಿರಿ.

10:6b.MAT.010.006 ಆದರೆ ತಪ್ಪಿಸಿಕೊಂಡ ಕುರಿಗಳಾದ ಇಸ್ರಾಯೇಲಿನ ಮನೆತನದವರ ಬಳಿಗೆ ಮಾತ್ರ ಹೋಗಿರಿ.

10:7b.MAT.010.007 ನೀವು ಹೋಗುವಾಗ-- ಪರಲೋಕ ರಾಜ್ಯವು ಸಮಾಪವಾಯಿತು ಎಂದು ಸಾರಿ ಹೇಳಿರಿ.

10:8b.MAT.010.008 ರೋಗಿಗಳನ್ನು ಸ್ವಸ್ಥಮಾಡಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ಸತ್ತವರನ್ನು ಎಬ್ಬಿಸಿರಿ, ದೆವ್ವಗಳನ್ನು ಬಿಡಿಸಿರಿ; ನೀವು ಉಚಿತವಾಗಿ ಹೊಂದಿದ್ದೀರಿ, ಉಚಿತ ವಾಗಿ ಕೊಡಿರಿ.

10:9b.MAT.010.009 ನಿಮ್ಮ ಹಮ್ಮಾಣಿಗಳಲ್ಲಿ ಬಂಗಾರ, ಬೆಳ್ಳಿ ಮತ್ತು ಹಿತ್ತಾಳೆ ಇಟ್ಟುಕೊಳ್ಳಬೇಡಿರಿ.

10:10b.MAT.010.010 ಪ್ರಯಾಣಕ್ಕೆ ಹಸಿಬೆಯನ್ನಾಗಲೀ ಎರಡು ಮೇಲಂಗಿಗಳ ನ್ನಾಗಲೀ ಕೆರಗಳನ್ನಾಗಲೀ ಕೋಲುಗಳನ್ನಾಗಲೀ ತಕ್ಕೊ ಳ್ಳಬೇಡಿರಿ; ಯಾಕಂದರೆ ಕೆಲಸ ಮಾಡುವವನು ತನ್ನ ಆಹಾರಕ್ಕೆ ಯೋಗ್ಯನಾಗಿದ್ದಾನೆ.

10:11b.MAT.010.011 ನೀವು ಯಾವದಾದರೂ ಪಟ್ಟಣದೊಳ ಗಾಗಲೀ ಊರೊಳಗಾಗಲೀ ಪ್ರವೇಶಿಸುವಾಗ ಅದರಲ್ಲಿ ಯಾರು ಯೋಗ್ಯರಾಗಿದ್ದಾರೆಂದು ವಿಚಾರಿ ಸಿರಿ; ಮತ್ತು ಅಲ್ಲಿಂದ ಹೊರಡುವ ವರೆಗೆ ಅಲ್ಲಿಯೇ ಇಳುಕೊಂಡಿರ್ರಿ;

10:12b.MAT.010.012 ನೀವು ಒಂದು ಮನೆಯೊಳಕ್ಕೆ ಬಂದಾಗ ಅವರನ್ನು ವಂದಿಸಿರಿ.

10:13b.MAT.010.013 ಆ ಮನೆಯು ಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ಅದರ ಮೇಲೆ ಬರಲಿ; ಆದರೆ ಅದು ಅಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಲಿ.

10:14b.MAT.010.014 ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆ ಹೋದರೆ ಇಲ್ಲವೆ ನಿಮ್ಮ ಮಾತುಗಳನ್ನು ಕೇಳದೆ ಹೋದರೆ ನೀವು ಆ ಮನೆಯಿಂದಾಗಲೀ ಪಟ್ಟಣದಿಂದಾಗಲೀ ಹೊರಡುವಾಗ ನಿಮ್ಮ ಪಾದಗಳ ಧೂಳನ್ನು ಝಾಡಿಸಿ ಬಿಡಿರಿ.

10:15b.MAT.010.015 ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನ್ಯಾಯತೀರ್ಪಿನ ದಿನದಲ್ಲಿ ಆ ಪಟ್ಟಣಕ್ಕಿಂತ ಸೊದೋಮ್‌ ಗೊಮೋರ ಪಟ್ಟಣಗಳ ಗತಿಯು ತಾಳಬಹುದಾಗಿರುವದು.

10:16b.MAT.010.016 ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ.

10:17b.MAT.010.017 ಆದರೆ ಜನರ ವಿಷಯದಲ್ಲಿ ಎಚ್ಚ ರಿಕೆಯಾಗಿರ್ರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯ ವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ತಮ್ಮ ಸಭಾ ಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯು ವರು.

10:18b.MAT.010.018 ಇದಲ್ಲದೆ ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿ ಕಾರಿಗಳ ಮತ್ತು ಅರಸುಗಳ ಮುಂದಕ್ಕೆ ತೆಗೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವದು.

10:19b.MAT.010.019 ಆದರೆ ಅವರು ನಿಮ್ಮನ್ನು ಒಪ್ಪಿಸಿ ಕೊಟ್ಟಾಗ ನೀವು ಹೇಗೆ ಇಲ್ಲವೆ ಏನು ಮಾತನಾಡ ಬೇಕೆಂಬದಾಗಿ ಯೋಚಿಸಬೇಡಿರಿ; ಯಾಕಂದರೆ ನೀವು ಏನು ಮಾತನಾಡಬೇಕೆಂಬದು ಆ ಗಳಿಗೆಯಲ್ಲಿಯೇ ನಿಮಗೆ ತಿಳಿಸಲ್ಪಡುವದು.

10:20b.MAT.010.020 ಯಾಕಂದರೆ ಮಾತನಾಡು ವವರು ನೀವಲ್ಲ, ಆದರೆ ನಿಮ್ಮ ತಂದೆಯ ಆತ್ಮನು ನಿಮ್ಮೊಳಗೆ ಮಾತನಾಡುತ್ತಾನೆ.

10:21b.MAT.010.021 ಸಹೋದರನು ತನ್ನ ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮತ್ತು ಮಕ್ಕಳು ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು.

10:22b.MAT.010.022 ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ಹಗೆ ಮಾಡುವರು; ಆದರೆ ಕಡೆಯ ವರೆಗೆ ತಾಳುವವನು ರಕ್ಷಣೆ ಹೊಂದುವನು.

10:23b.MAT.010.023 ಇದಲ್ಲದೆ ಈ ಪಟ್ಟಣದಲ್ಲಿ ಅವರು ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಪಟ್ಟಣಕ್ಕೆ ಓಡಿಹೋಗಿರಿ; ಯಾಕಂದರೆ-- ಮನುಷ್ಯ ಕುಮಾರನು ಬರುವದರೊಳಗಾಗಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವದಕ್ಕಾಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.

10:24b.MAT.010.024 ಗುರುವಿಗಿಂತ ಶಿಷ್ಯನು ಹೆಚ್ಚಿನವನಲ್ಲ; ಇಲ್ಲವೆ ಸೇವಕನು ತನ್ನ ಯಜಮಾನನಿಗಿಂತ ಹೆಚ್ಚಿನವನಲ್ಲ.

10:25b.MAT.010.025 ಶಿಷ್ಯನು ತನ್ನ ಗುರುವಿನಂತೆಯೂ ಸೇವಕನು ತನ್ನ ಯಜಮಾನನಂತೆಯೂ ಇರುವದು ಸಾಕು; ಮನೆಯ ಯಜಮಾನನನ್ನೇ ಅವರು ಬೆಲ್ಜೆಬೂಲನೆಂದು ಕರೆದರೆ ಅವನ ಮನೆಯವರನ್ನು ಇನ್ನೂ ಎಷ್ಟೋ ಹೆಚ್ಚಾಗಿ ಕರೆಯುವರಲ್ಲವೇ?

10:26b.MAT.010.026 ಆದದರಿಂದ ಅವರಿಗೆ ಹೆದರಬೇಡಿರಿ; ಯಾಕಂದರೆ ಪ್ರಕಟಿಸಲ್ಪಡದಂತೆ ಯಾವದೂ ಮುಚ್ಚಲ್ಪಡುವದಿಲ್ಲ; ತಿಳಿಯಲ್ಪಡದಂತೆ ಯಾವದೂ ಮರೆಯಾಗುವದಿಲ್ಲ.

10:27b.MAT.010.027 ನಾನು ನಿಮಗೆ ಕತ್ತಲೆಯಲ್ಲಿ ಯಾವದನ್ನು ಹೇಳುತ್ತೇನೋ ಅದನ್ನು ನೀವು ಬೆಳಕಿನಲ್ಲಿ ಮಾತನಾಡಿರಿ; ನೀವು ಕಿವಿಯಲ್ಲಿ ಯಾವದನ್ನು ಕೇಳುತ್ತೀರೋ ಅದನ್ನು ಮಾಳಿಗೆಗಳ ಮೇಲೆ ಸಾರಿರಿ.

10:28b.MAT.010.028 ಶರೀರವನ್ನು ಕೊಲ್ಲುವವರಿಗೆ ಹೆದರಬೇಡಿರಿ; ಯಾಕಂದರೆ ಅವರು ಆತ್ಮವನ್ನು ಕೊಲ್ಲಲು ಶಕ್ತರಲ್ಲ; ಆದರೆ ಆತ್ಮ ಮತ್ತು ಶರೀರ ಎರಡನ್ನೂ ನರಕದಲ್ಲಿ ನಾಶಮಾಡಲು ಶಕ್ತನಾಗಿರು ವಾತನಿಗೇ ಭಯಪಡಿರಿ.

10:29b.MAT.010.029 ಒಂದು ಕಾಸಿಗೆ ಎರಡು ಗುಬ್ಬಿಗಳು ಮಾರಲ್ಪಡುತ್ತವಲ್ಲಾ; ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಅವುಗಳಲ್ಲಿ ಒಂದಾದರೂ ನೆಲಕ್ಕೆ ಬೀಳುವದಿಲ್ಲ.

10:30b.MAT.010.030 ಆದರೆ ನಿಮ್ಮ ತಲೆಯ ಕೂದಲುಗಳೆಲ್ಲಾ ಲೆಕ್ಕಿಸಲ್ಪಟ್ಟಿವೆ.

10:31b.MAT.010.031 ನೀವು ಬಹಳ ಗುಬ್ಬಿಗಳಿಗಿಂತ ಬಹು ಬೆಲೆಯುಳ್ಳವರಾಗಿದ್ದೀರಿ. ಆದದರಿಂದ ಭಯಪಡಬೇಡಿರಿ.

10:32b.MAT.010.032 ಯಾವನಾದರೂ ಮನುಷ್ಯರ ಮುಂದೆ ನನ್ನನ್ನು ಒಪ್ಪಿಕೊಂಡರೆ ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಅವನನ್ನು ಒಪ್ಪಿಕೊಳ್ಳುವೆನು;

10:33b.MAT.010.033 ಯಾವನಾದರೂ ಮನುಷ್ಯರ ಮುಂದೆ ನನ್ನನ್ನು ಅಲ್ಲಗಳೆದರೆ ಪರಲೋಕ ದಲ್ಲಿರುವ ನನ್ನ ತಂದೆಯ ಮುಂದೆ ನಾನೂ ಅವನನ್ನು ಅಲ್ಲಗಳೆಯುವೆನು.

10:34b.MAT.010.034 ನಾನು ಭೂಮಿಯ ಮೇಲೆ ಸಮಾಧಾನವನ್ನು ಕಳುಹಿಸುವದಕ್ಕಾಗಿ ಬಂದೆನೆಂದು ನೆನಸಬೇಡಿರಿ; ಖಡ್ಗ ವನ್ನಲ್ಲದೆ ಸಮಾಧಾನವನ್ನು ಕಳುಹಿಸುವದಕ್ಕೆ ನಾನು ಬಂದಿಲ್ಲ;

10:35b.MAT.010.035 ಹೇಗಂದರೆ ಮಗನಿಗೂ ಅವನ ತಂದೆಗೂ ಮಗಳಿಗೂ ಆಕೆಯ ತಾಯಿಗೂ ಸೊಸೆಗೂ ಆಕೆಯ ಅತ್ತೆಗೂ ವಿರೋಧವನ್ನು ಹುಟ್ಟಿಸುವದಕ್ಕೆ ನಾನು ಬಂದಿದ್ದೇನೆ.

10:36b.MAT.010.036 ಒಬ್ಬ ಮನುಷ್ಯನಿಗೆ ಅವನ ಮನೆ ಯವರೇ ವಿರೋಧಿಗಳಾಗಿರುವರು.

10:37b.MAT.010.037 ನನಗಿಂತ ಹೆಚ್ಚಾಗಿ ತಂದೆಯನ್ನಾಗಲೀ ತಾಯಿಯನ್ನಾಗಲೀ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ; ಮತ್ತು ಮಗನ ನ್ನಾಗಲೀ ಮಗಳನ್ನಾಗಲೀ ನನಗಿಂತ ಹೆಚ್ಚಾಗಿ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ.

10:38b.MAT.010.038 ತನ್ನ ಶಿಲುಬೆ ಯನ್ನು ತೆಗೆದುಕೊಳ್ಳದೆ ನನ್ನನ್ನು ಹಿಂಬಾಲಿಸುವವನು ನನಗೆ ಯೋಗ್ಯನಲ್ಲ.

10:39b.MAT.010.039 ತನ್ನ ಪ್ರಾಣವನ್ನು ಕಂಡು ಕೊಳ್ಳುವವನು ಅದನ್ನು ಕಳಕೊಳ್ಳುವನು; ನನ್ನ ನಿಮಿತ್ತ ವಾಗಿ ತನ್ನ ಪ್ರಾಣವನ್ನು ಕಳಕೊಳ್ಳುವವನು ಅದನ್ನು ಕಂಡುಕೊಳ್ಳುವನು.

10:40b.MAT.010.040 ನಿಮ್ಮನ್ನು ಅಂಗೀಕರಿಸಿಕೊಳ್ಳುವವನು ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಮತ್ತು ನನ್ನನ್ನು ಅಂಗೀಕರಿಸಿ ಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನು ಅಂಗೀಕರಿಸಿ ಕೊಳ್ಳುತ್ತಾನೆ.

10:41b.MAT.010.041 ಪ್ರವಾದಿಯ ಹೆಸರಿನಲ್ಲಿ ಪ್ರವಾದಿ ಯನ್ನು ಅಂಗೀಕರಿಸುವವನು ಪ್ರವಾದಿಯ ಪ್ರತಿಫಲ ವನ್ನು ಪಡಕೊಳ್ಳುವನು; ನೀತಿವಂತನ ಹೆಸರಿನಲ್ಲಿ ನೀತಿವಂತನನ್ನು ಅಂಗೀಕರಿಸುವವನು ನೀತಿವಂತನ ಪ್ರತಿಫಲವನ್ನು ಪಡಕೊಳ್ಳುವನು.ಯಾವನಾದರೂ ಶಿಷ್ಯನ ಹೆಸರಿನಲ್ಲಿ ಈ ಚಿಕ್ಕವರಾದ ಒಬ್ಬನಿಗೆ ಕೇವಲ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಅವನು ತನ್ನ ಪ್ರತಿಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.

10:42b.MAT.010.042 ಯಾವನಾದರೂ ಶಿಷ್ಯನ ಹೆಸರಿನಲ್ಲಿ ಈ ಚಿಕ್ಕವರಾದ ಒಬ್ಬನಿಗೆ ಕೇವಲ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಅವನು ತನ್ನ ಪ್ರತಿಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.

11

11:1b.MAT.011.001 ಮತ್ತು ಆದದ್ದೇನಂದರೆ, ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಅಪ್ಪಣೆ ಕೊಡು ವದನ್ನು ಮುಗಿಸಿದ ಮೇಲೆ ಅವರ ಪಟ್ಟಣಗಳಲ್ಲಿ ಬೋಧಿಸುವದಕ್ಕೂ ಸಾರುವದಕ್ಕೂ ಅಲ್ಲಿಂದ ಹೊರಟು ಹೋದನು.

11:2b.MAT.011.002 ಆಗ ಯೋಹಾನನು ಸೆರೆಮನೆಯಲ್ಲಿ ಕ್ರಿಸ್ತನ ಕಾರ್ಯಗಳನ್ನು ಕೇಳಿದ್ದರಿಂದ ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಆತನಿಗೆ--

11:3b.MAT.011.003 ಬರಬೇಕಾದಾತನು ನೀನೋ ಇಲ್ಲವೆ ನಾವು ಬೇರೊಬ್ಬನಿಗಾಗಿ ನೋಡಬೇಕೋ ಅಂದನು.

11:4b.MAT.011.004 ಯೇಸು ಪ್ರತ್ಯುತ್ತರವಾಗಿ ಅವರಿಗೆ-- ನೀವು ಹೋಗಿ ಕೇಳುವವುಗಳನ್ನೂ ನೋಡುವವು ಗಳನ್ನೂ ಯೋಹಾನನಿಗೆ ತಿಳಿಸಿರಿ;

11:5b.MAT.011.005 ಕುರುಡರು ದೃಷ್ಟಿ ಹೊಂದುತ್ತಾರೆ, ಕುಂಟರು ನಡೆಯುತ್ತಾರೆ,ಕುಷ್ಟರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.

11:6b.MAT.011.006 ನನ್ನ ವಿಷಯವಾಗಿ ಸಂಶಯಪಡದವನೇ ಧನ್ಯನು ಅಂದನು.

11:7b.MAT.011.007 ಅವರು ಹೊರಟುಹೋಗುತ್ತಿದ್ದಾಗ ಯೇಸು ಯೋಹಾನನ ಕುರಿತಾಗಿ ಜನಸಮೂಹಗಳೊಂ ದಿಗೆ -- ಏನು ನೋಡುವದಕ್ಕಾಗಿ ನೀವು ಅಡವಿಗೆ ಹೋದಿರಿ? ಗಾಳಿಯಿಂದ ಅಲ್ಲಾಡುವದಂಟನ್ನೋ?

11:8b.MAT.011.008 ಆದರೆ ನೀವು ಏನು ನೊಡುವದಕ್ಕಾಗಿ ಹೋದಿರಿ? ನಯವಾದ ವಸ್ತ್ರಗಳನ್ನು ಧರಿಸಿಕೊಂಡ ಮನುಷ್ಯ ನನ್ನೋ? ಇಗೋ, ನಯವಾದ ಬಟ್ಟೆಗಳನ್ನು ಧರಿಸಿಕೊ ಳ್ಳುವವರು ಅರಮನೆಗಳಲ್ಲಿ ಇರುತ್ತಾರೆ.

11:9b.MAT.011.009 ಆದರೆ ನೀವು ಏನು ನೋಡುವದಕ್ಕಾಗಿ ಹೋದಿರಿ? ಪ್ರವಾದಿ ಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನು ಎಂದು ನಾನು ನಿಮಗೆ ಹೇಳುತ್ತೇನೆ.

11:10b.MAT.011.010 ಯಾಕಂ ದರೆ--ಇಗೋ, ನಿನ್ನ ಮಾರ್ಗವನ್ನು ನಿನ್ನ ಮುಂದೆ ಸಿದ್ಧಪಡಿಸುವ ನನ್ನ ದೂತನನ್ನು ನಾನು ನಿನ್ನ ಮುಂದೆ ಕಳುಹಿಸುತ್ತೇನೆಂದು ಯಾವನ ವಿಷಯವಾಗಿ ಬರೆದಿ ದೆಯೋ ಅವನೇ ಇವನು.

11:11b.MAT.011.011 ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಸ್ತ್ರೀಯರಲ್ಲಿ ಹುಟ್ಟಿದವರೊ ಳಗೆ ಬಾಪ್ತಿಸ್ಮ ಮಾಡಿಸುವ ಯೋಹಾನನಿಗಿಂತ ದೊಡ್ಡವನು ಏಳಲಿಲ್ಲ; ಆದಾಗ್ಯೂ ಪರಲೋಕ ರಾಜ್ಯದಲ್ಲಿ ಅತ್ಯಲ್ಪನಾದವನು ಅವನಿಗಿಂತಲೂ ದೊಡ್ಡ ವನಾಗಿದ್ದಾನೆ.

11:12b.MAT.011.012 ಇದಲ್ಲದೆ ಬಾಪ್ತಿಸ್ಮ ಮಾಡಿಸುವ ಯೋಹಾನನ ದಿನಗಳಿಂದ ಇದುವರೆಗೆ ಪರಲೋಕ ರಾಜ್ಯವು ಬಲಾತ್ಕಾರಕ್ಕೆ ಗುರಿಯಾಗಿದೆ; ಮತ್ತು ಬಲಾತ್ಕಾರಿಗಳು ಅದನ್ನು ಒತ್ತಾಯದಿಂದ ತೆಗೆದು ಕೊಳ್ಳುತ್ತಾರೆ.

11:13b.MAT.011.013 ಯಾಕಂದರೆ ಎಲ್ಲಾ ಪ್ರವಾದಿಗಳೂ ನ್ಯಾಯಪ್ರಮಾಣವೂ ಯೋಹಾನನ ವರೆಗೆ ಪ್ರವಾದಿ ಸಿದ್ದುಂಟು.

11:14b.MAT.011.014 ನೀವು ಇದನ್ನು ಅಂಗೀಕರಿಸುವದಕ್ಕೆ ಮನಸ್ಸಿದ್ದರೆ ಬರಬೇಕಾಗಿದ್ದ ಎಲೀಯನು ಇವನೇ.

11:15b.MAT.011.015 ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ.

11:16b.MAT.011.016 ಆದರೆ ಈ ಸಂತತಿಯನ್ನು ನಾನು ಯಾವದಕ್ಕೆ ಹೋಲಿಸಲಿ? ಮಕ್ಕಳು ಪೇಟೆಗಳಲ್ಲಿ ಕೂತುಕೊಂಡು ತಮ್ಮ ಸಂಗಡಿ ಗರನ್ನು ಕರೆಯುತ್ತಾ--

11:17b.MAT.011.017 ನಾವು ನಿಮಗೋಸ್ಕರ ಕೊಳಲೂದಿದೆವು, ಆದರೆ ನೀವು ಕುಣಿಯಲಿಲ್ಲ; ನಾವು ನಿಮಗೋಸ್ಕರ ಶೋಕಿಸಿದೆವು, ಆದರೆ ನೀವು ಗೋಳಾಡಲಿಲ್ಲ ಎಂದು ಹೇಳುವವರಿಗೆ ಇದು ಹೋಲಿಕೆಯಾಗಿದೆ.

11:18b.MAT.011.018 ಯಾಕಂದರೆ ಯೋಹಾನನು ತಿನ್ನದೆಯೂ ಕುಡಿಯದೆಯೂ ಬಂದನು. ಅದಕ್ಕೆ ಅವರು--ಅವನಿಗೆ ದೆವ್ವ ಹಿಡಿದಿದೆ ಅನ್ನುತ್ತಾರೆ.

11:19b.MAT.011.019 ಮನುಷ್ಯಕುಮಾರನು ತಿನ್ನುವವನಾಗಿಯೂ ಕುಡಿಯುವವನಾಗಿಯೂ ಬಂದನು. ಅದಕ್ಕೆ ಅವರು--ಇಗೋ, ಈ ಮನುಷ್ಯನು ಹೊಟ್ಟೆ ಬಾಕನೂ ಮದ್ಯಪಾನ ಮಾಡುವವನೂ ಸುಂಕದವರ ಪಾಪಿಗಳ ಸ್ನೇಹಿತನೂ ಎಂದು ಅನ್ನುತ್ತಾರೆ. ಆದರೆ ಜ್ಞಾನವು ನೀತಿಯುಳ್ಳದ್ದೆಂದು ತನ್ನ ಮಕ್ಕಳಿಂದ ನಿರ್ಣಯಿ ಸಲ

11:20b.MAT.011.020 ತರುವಾಯ ತಾನು ಹೆಚ್ಚಾದ ಮಹತ್ಕಾರ್ಯ ಗಳನ್ನು ನಡಿಸಿದ ಪಟ್ಟಣಗಳು ಮಾನಸಾಂತರಪಡದೆ ಇದ್ದದರಿಂದ ಆತನು ಅವುಗಳನ್ನು ಗದರಿಸತೊ ಡಗಿ --

11:21b.MAT.011.021 ಖೊರಾಜಿನೇ, ನಿನಗೆ ಅಯ್ಯೋ! ಬೆತ್ಸಾಯಿದವೇ, ನಿನಗೆ ಅಯ್ಯೋ! ಯಾಕಂದರೆ ನಿನ್ನೊಳಗೆ ನಡೆದ ಮಹತ್ಕಾರ್ಯಗಳು ತೂರ್‌ ಮತ್ತು ಸೀದೋನ್‌ಗಳಲ್ಲಿ ನಡೆಯುತ್ತಿದ್ದರೆ ಅವುಗಳು ಆಗಲೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರಪಡುತ್ತಿದ್ದವು.

11:22b.MAT.011.022 ಆದರೆ ನಾನು ನಿಮಗೆ ಹೇಳುವದೇನಂದರೆ-- ನ್ಯಾಯತೀರ್ಪಿನ ದಿನದಲ್ಲಿ ನಿಮಗಿಂತಲೂ ತೂರ್‌ ಮತ್ತು ಸೀದೋನ್‌ಗಳ ಗತಿಯು ಹೆಚ್ಚು ತಾಳಬಹುದಾಗಿರುವದು.

11:23b.MAT.011.023 ಆಕಾಶದವರೆಗೂ ಹೆಚ್ಚಿಸಲ್ಪಟ್ಟ ಕಪೆರ್ನೌಮೇ, ನೀನು ಕೆಳಗೆ ಪಾತಾಳಕ್ಕೆ ದೊಬ್ಬಲ್ಪಡುವಿ; ಯಾಕಂದರೆ ನಿನ್ನೊಳಗೆ ನಡೆದಿರುವ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಈ ದಿನದವರೆಗೂ ಇರುತ್ತಿತ್ತು.

11:24b.MAT.011.024 ಆದರೆ ನಾನು ನಿನಗೆ ಹೇಳುವದೇನಂದರೆ --ನ್ಯಾಯತೀರ್ಪಿನ ದಿನದಲ್ಲಿ ನಿನಗಿಂತಲೂ ಸೊದೋಮಿನ ಗತಿಯು ಹೆಚ್ಚು ತಾಳಬಹುದಾಗಿರುವದು.

11:25b.MAT.011.025 ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.

11:26b.MAT.011.026 ಹೌದು, ತಂದೆಯೇ, ಇದು ನಿನ್ನ ದೃಷ್ಟಿಯಲ್ಲಿ ಒಳ್ಳೆಯದಾಗಿ ತೋಚಿತು.

11:27b.MAT.011.027 ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ತಂದೆಯೇ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ; ಇಲ್ಲವೆ ಮಗನೇ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದ

11:28b.MAT.011.028 ಕಷ್ಟಪಡುವವರೇ ಮತ್ತು ಭಾರಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು.

11:29b.MAT.011.029 ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತು ಕೊಳ್ಳಿರಿ; ಯಾಕಂದರೆ ನಾನು ಸಾತ್ವಿಕನೂ ದೀನ ಮನಸ್ಸುಳ್ಳವನೂ ಆಗಿರುವದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು.

11:30b.MAT.011.030 ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು.

12

12:1b.MAT.012.001 ಆ ಸಮಯದಲ್ಲಿ ಯೇಸು ಸಬ್ಬತ್‌ ದಿನದಲ್ಲಿ ಪೈರಿನ ಹೊಲವನು ಹಾದುಹೋಗುತ್ತಿದ್ದಾಗ ಆತನ ಶಿಷ್ಯರು ಹಸಿದಿ ದ್ದರಿಂದ ತೆನೆಗಳನ್ನು ಕಿತ್ತು ತಿನ್ನಲಾರಂಭಿಸಿದರು.

12:2b.MAT.012.002 ಆದರೆ ಫರಿಸಾಯರು ಅದನ್ನು ನೋಡಿ ಆತನಿಗೆ--ಇಗೋ, ನಿನ್ನ ಶಿಷ್ಯರು ಸಬ್ಬತ್‌ದಿನದಲ್ಲಿ ಮಾಡ ಬಾರದ್ದನ್ನು ಮಾಡುತ್ತಾರೆ ಅಂದರು.

12:3b.MAT.012.003 ಅದಕ್ಕೆ ಆತನು ಅವರಿಗೆ--ದಾವೀದನು ತಾನೂ ತನ್ನ ಸಂಗಡ ಇದ್ದವರೂ ಹಸಿದಾಗ ಏನು ಮಾಡಿದನೆಂದು ನೀವು ಓದಲಿಲ್ಲವೋ?

12:4b.MAT.012.004 ಅವನು ದೇವರ ಮನೆ ಯೊಳಗೆ ಪ್ರವೇಶಿಸಿ ಯಾಜಕರೇ ಹೊರತು ತಾನಾಗಲೀ ತನ್ನ ಕೂಡ ಇದ್ದವರಾಗಲೀ ತಿನ್ನಬಾರದಾಗಿದ್ದ ಸಮ್ಮುಖ ರೊಟ್ಟಿಯನ್ನು ಹೇಗೆ ತಿಂದನು?

12:5b.MAT.012.005 ಇದಲ್ಲದೆ ಸಬ್ಬತ್‌ ದಿನಗಳಲ್ಲಿ ಯಾಜಕರು ದೇವಾಲಯದಲ್ಲಿ ಸಬ್ಬತ್ತನ್ನು ಅಪವಿತ್ರಪಡಿಸಿದರೂ ನಿರಪರಾಧಿಗಳಾಗಿದ್ದಾ ರೆಂದು ನೀವು ನ್ಯಾಯಪ್ರಮಾಣದಲ್ಲಿ ಓದಲಿಲ್ಲವೇ?

12:6b.MAT.012.006 ಆದರೆ ನಾನು ನಿಮಗೆ ಹೇಳುವದೇನಂದರೆ-- ದೇವಾಲಯಕ್ಕಿಂತಲೂ ದೊಡ್ಡವನು ಈ ಸ್ಥಳದಲ್ಲಿ ಇದ್ದಾನೆ.

12:7b.MAT.012.007 ಆದರೆ--ನನಗೆ ಯಜ್ಞವಲ್ಲ, ಕರುಣೆಯೇ ಬೇಕು ಎಂಬದರ ಅರ್ಥವನ್ನು ನೀವು ತಿಳಿದಿದ್ದರೆ ನಿರಪರಾಧಿಗಳನ್ನು ಅಪರಾಧಿಗಳೆಂದು ತೀರ್ಪುಮಾಡು ತ್ತಿದ್ದಿಲ್ಲ.

12:8b.MAT.012.008 ಯಾಕಂದರೆ ಮನುಷ್ಯ ಕುಮಾರನು ಸಬ್ಬತ್‌ ದಿನಕ್ಕೂ ಒಡೆಯನಾಗಿದ್ದಾನೆ ಎಂದು ಹೇಳಿದನು.

12:9b.MAT.012.009 ತರುವಾಯ ಆತನು ಅಲ್ಲಿಂದ ಹೊರಟು ಅವರ ಸಭಾಮಂದಿರದೊಳಕ್ಕೆ ಹೋದನು.

12:10b.MAT.012.010 ಇಗೋ, ಅಲ್ಲಿ ಕೈ ಬತ್ತಿದ್ದ ಒಬ್ಬ ಮನುಷ್ಯನಿದ್ದನು. ಆಗ ಅವರು ಆತನ ಮೇಲೆ ತಪ್ಪು ಹೊರಿಸಬೇಕೆಂದು ಆತನಿಗೆ-- ಸಬ್ಬತ್‌ ದಿನಗಳಲ್ಲಿ ಸ್ವಸ್ಥ ಮಾಡುವದು ನ್ಯಾಯವೋ ಎಂದು ಕೇಳಿದರು.

12:11b.MAT.012.011 ಅದಕ್ಕಾತನು ಅವರಿಗೆ-- ನಿಮ್ಮಲ್ಲಿ ಯಾವನಿಗಾದರೂ ಒಂದು ಕುರಿಯಿರಲಾಗಿ ಅದು ಸಬ್ಬತ್‌ ದಿನದಲ್ಲಿ ಕುಣಿಯೊಳಗೆ ಬಿದ್ದರೆ ಅವನು ಅದನ್ನು ಹಿಡಿದು ಮೇಲಕ್ಕೆ ಎತ್ತದೆ ಇರುವನೇ?

12:12b.MAT.012.012 ಹಾಗಾದರೆ ಕುರಿಗಿಂತಲೂ ಒಬ್ಬ ಮನುಷ್ಯನು ಎಷ್ಟೋ ಶ್ರೇಷ್ಠನಾಗಿದ್ದಾನಲ್ಲವೇ? ಆದದರಿಂದ ಸಬ್ಬತ್‌ ದಿನಗಳಲ್ಲಿ ಒಳ್ಳೆಯದನ್ನು ಮಾಡುವದು ನ್ಯಾಯವಾಗಿದೆ ಎಂದು ಹೇಳಿದನು.

12:13b.MAT.012.013 ಆಗ ಆತನು ಆ ಮನುಷ್ಯನಿಗೆ--ನಿನ್ನ ಕೈಯನ್ನು ಮುಂದೆ ಚಾಚು ಅಂದನು. ಅವನು ಚಾಚಿದಾಗ ಅದು ಗುಣವಾಗಿ ಮತ್ತೊಂದರ ಹಾಗಾಯಿತು.

12:14b.MAT.012.014 ತರುವಾಯ ಫರಿಸಾ ಯರು ಆತನನ್ನು ಹೇಗೆ ಕೊಲ್ಲಬೇಕೆಂದು ಆತನಿಗೆ ವಿರೋಧವಾಗಿ ಆಲೋಚಿಸಲು ಹೊರಗೆ ಹೋದರು.

12:15b.MAT.012.015 ಆದರೆ ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟು ಹೋದನು; ಮತ್ತು ದೊಡ್ಡ ಸಮೂಹಗಳು ಆತನನ್ನು ಹಿಂಬಾಲಿಸಿದರು. ಆಗ ಆತನು ಅವರೆಲ್ಲರನ್ನು ವಾಸಿ ಮಾಡಿದನು.

12:16b.MAT.012.016 ಯೇಸು ತನ್ನನ್ನು ಯಾರಿಗೂ ಪ್ರಕಟಿಸ ಬಾರದೆಂದು ಅವರಿಗೆ ಆಜ್ಞಾಪಿಸಿದನು;

12:17b.MAT.012.017 ಹೀಗೆ ಪ್ರವಾದಿಯಾದ ಯೆಶಾಯನಿಂದ ಹೇಳಲ್ಪಟ್ಟಿದ್ದು ನೆರವೇರಿತು; ಅದೇನಂದರೆ--

12:18b.MAT.012.018 ಇಗೋ, ನಾನು ಆರಿಸಿಕೊಂಡ ನನ್ನ ಸೇವಕನು; ನನ್ನ ಪ್ರಾಣವು ಬಹಳವಾಗಿ ಮೆಚ್ಚಿಕೊಂಡಿರುವ ನನ್ನ ಪ್ರಿಯನು; ನಾನು ಆತನ ಮೇಲೆ ನನ್ನ ಆತ್ಮನನ್ನು ಇರಿಸುವೆನು ಮತ್ತು ಆತನು ಅನ್ಯಜನಗಳಿಗೆ ನ್ಯಾಯವನ್ನು ತೋರಿ ಸುವನು.

12:19b.MAT.012.019 ಆತನು ಜಗಳವಾಡುವದಿಲ್ಲ, ಕೂಗಾಡು ವದೂ ಇಲ್ಲ; ಇಲ್ಲವೆ ಯಾವ ಮನುಷ್ಯನು ಬೀದಿಗಳಲ್ಲಿ ಆತನ ಸ್ವರವನ್ನು ಕೇಳಿಸಿಕೊಳ್ಳುವದೂ ಇಲ್ಲ.

12:20b.MAT.012.020 ಆತನು ನ್ಯಾಯವನ್ನು ವಿಜಯಕ್ಕಾಗಿ ಕಳುಹಿಸುವವರೆಗೆ ಜಜ್ಜಿದ ದಂಟನ್ನು ಮುರಿಯುವದಿಲ್ಲ ಮತ್ತು ಹೊಗೆಯಾಡುವ ಬತ್ತಿಯನ್ನು ನಂದಿಸುವದಿಲ್ಲ.

12:21b.MAT.012.021 ಮತ್ತು ಆತನ ಹೆಸರಿನಲ್ಲಿ ಅನ್ಯಜನರು ನಂಬಿಕೆಯಿಡುವರು ಎಂಬದೇ.

12:22b.MAT.012.022 ಆಗ ಜನರು ದೆವ್ವ ಹಿಡಿದಿದ್ದವನೂ ಕುರುಡನೂ ಮೂಕನೂ ಆಗಿದ್ದವನನ್ನು ಆತನ ಬಳಿಗೆ ತಂದರು; ಮತ್ತು ಆತನು ಅವನನ್ನು ಸ್ವಸ್ಥಮಾಡಿದ್ದರಿಂದ ಕುರುಡನೂ ಮೂಕನೂ ಆಗಿದ್ದವನು ಮಾತನಾಡಿದನು ಮತ್ತು ನೋಡಿದನು.

12:23b.MAT.012.023 ಆಗ ಜನರೆಲ್ಲರು ವಿಸ್ಮಯ ಗೊಂಡವರಾಗಿ--ಈತನು ದಾವೀದನ ಕುಮಾರ ನಲ್ಲವೇ ಅಂದರು.

12:24b.MAT.012.024 ಆದರೆ ಫರಿಸಾಯರು ಇದನ್ನು ಕೇಳಿದಾಗ--ಇವನು ದೆವ್ವಗಳ ಅಧಿಪತಿಯಾಗಿರುವ ಬೆಲ್ಜೆಬೂಲನಿಂದಲೇ ಹೊರತು ದೆವ್ವಗಳನ್ನು ಬಿಡಿಸು ವದಿಲ್ಲ ಅಂದರು.

12:25b.MAT.012.025 ಆಗ ಯೇಸು ಅವರ ಆಲೋಚನೆ ಗಳನ್ನು ತಿಳಿದು ಅವರಿಗೆ--ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ರಾಜ್ಯವು ಹಾಳಾಗುತ್ತದೆ; ಮತ್ತು ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ಪಟ್ಟಣವಾಗಲೀ ಮನೆಯಾಗಲೀ ನಿಲ್ಲುವದಿಲ್ಲ.

12:26b.MAT.012.026 ಇದಲ್ಲದೆ ಸೈತಾನನು ಸೈತಾನನನ್ನು ಹೊರಗೆ ಹಾಕಿದರೆ ಅವನು ತನಗೆ ವಿರೋಧವಾಗಿ ತಾನೇ ವಿಭಾಗಿಸಲ್ಪಟ್ಟಿದ್ದಾನೆ; ಹಾಗಾದರೆ ಅವನ ರಾಜ್ಯವು ಹೇಗೆ ನಿಂತೀತು?

12:27b.MAT.012.027 ಮತ್ತು ಬೆಲ್ಜೆಬೂಲನಿಂದ ನಾನು ದೆವ್ವಗಳನ್ನು ಬಿಡಿಸಿದರೆ ನಿಮ್ಮ ಮಕ್ಕಳು ಯಾರಿಂದ ಅವುಗಳನ್ನು ಬಿಡಿಸುತ್ತಾರೆ? ಆದದರಿಂದ ಅವರೇ ನಿಮಗೆ ನ್ಯಾಯತೀರಿಸುವರು.

12:28b.MAT.012.028 ಆದರೆ ನಾನು ದೇವರ ಆತ್ಮನಿಂದ ದೆವ್ವಗಳನ್ನು ಬಿಡಿಸಿದರೆ ದೇವರ ರಾಜ್ಯವು ನಿಮ್ಮ ಬಳಿಗೆ ಬಂದಿದೆಯಲ್ಲಾ.

12:29b.MAT.012.029 ಇಲ್ಲವೆ ಯಾವನಾದರೂ ಮೊದಲು ಬಲವುಳ್ಳ ಮನುಷ್ಯನನ್ನು ಕಟ್ಟಿಹಾಕದ ಹೊರತು ಅವನ ಮನೆ ಯನ್ನು ಪ್ರವೇಶಿಸಿ ಅವನ ಸೊತ್ತನ್ನು ಸುಲುಕೊಳ್ಳು ವದಕ್ಕಾದೀತೇ? ಕಟ್ಟಿದ ಮೇಲೆ ಅವನ ಮನೆಯನ್ನು ಸುಲುಕೊಳ್ಳುವದಕ್ಕಾಗುವದು.

12:30b.MAT.012.030 ನನ್ನ ಸಂಗಡ ಇರದ ವನು ನನಗೆ ವಿರೋಧವಾಗಿದ್ದಾನೆ; ಮತ್ತು ನನ್ನ ಸಂಗಡ ಕೂಡಿಸದವನು ಚದರಿಸುವವನಾಗಿದ್ದಾನೆ ಎಂದು ಹೇಳಿದನು.

12:31b.MAT.012.031 ಆದಕಾರಣ ನಾನು ನಿಮಗೆ ಹೇಳುವದೇ ನಂದರೆ-- ಎಲ್ಲಾ ತರದ ಪಾಪವೂ ದೂಷಣೆಯೂ ಮನುಷ್ಯರಿಗೆ ಕ್ಷಮಿಸಲ್ಪಡುವದು; ಆದರೆ ಪರಿಶು ದ್ಧಾತ್ಮನಿಗೆ ವಿರೋಧವಾದ ದೂಷಣೆಯು ಮನುಷ್ಯರಿಗೆ ಕ್ಷಮಿಸಲ್ಪಡುವದಿಲ್ಲ.

12:32b.MAT.012.032 ಮನುಷ್ಯ ಕುಮಾರನಿಗೆ ವಿರೋಧವಾಗಿ ಯಾವನಾದರೂ ಮಾತನಾಡಿದರೆ ಅದು ಅವನಿಗೆ ಕ್ಷಮಿಸಲ್ಪಡುವದು; ಆದರೆ ಪರಿಶುದ್ಧಾ ತ್ಮನಿಗೆ ವಿರೋಧವಾಗಿ ಯಾವನಾದರೂ ಮಾತನಾ ಡಿದರೆ ಈ ಲೋಕದಲ್ಲಿಯಾಗಲೀ ಇಲ್ಲವೆ ಬರುವ ಲೋಕದಲ್ಲಿಯಾಗಲೀ ಅದು ಅವನಿಗೆ ಕ್ಷಮಿಸಲ್ಪಡು ವದಿಲ್ಲ.

12:33b.MAT.012.033 ಮರವು ಒಳ್ಳೆಯದಾಗಿದ್ದರೆ ಅದರ ಫಲವೂ ಒಳ್ಳೆಯದೆಂದು ಎಣಿಸಿರಿ; ಇಲ್ಲವೇ ಮರವು ಕೆಟ್ಟದ್ದಾಗಿದ್ದರೆ ಅದರ ಫಲವೂ ಕೆಟ್ಟದ್ದೆಂದೆಣಿಸಿರಿ; ಯಾಕಂದರೆ ಮರವು ತನ್ನ ಫಲದಿಂದಲೇ ತಿಳಿಯಲ್ಪ ಡುವದು.

12:34b.MAT.012.034 ಓ ಸರ್ಪಸಂತತಿಯವರೇ, ಕೆಟ್ಟವರಾಗಿ ರುವ ನೀವು ಒಳ್ಳೆಯವುಗಳನ್ನು ಹೇಗೆ ಮಾತನಾಡೀರಿ? ಯಾಕಂದರೆ ಹೃದಯದಲ್ಲಿ ಸಮೃದ್ಧಿಯಾಗಿರುವದನ್ನೇ ಬಾಯಿ ಮಾತನಾಡುತ್ತದೆ.

12:35b.MAT.012.035 ಒಳ್ಳೇಮನುಷ್ಯನು ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯವುಗಳನ್ನು ಹೊರಗೆ ತರುತ್ತಾನೆ; ಮತ್ತು ಕೆಟ್ಟಮನುಷ್ಯನು ಕೆಟ್ಟಬೊಕ್ಕಸದಿಂದ ಕೆಟ್ಟವುಗಳನ್ನು ಹೊರಗೆ ತರುತ್ತಾನೆ.

12:36b.MAT.012.036 ಆದರೆ ನಾನು ನಿಮಗೆ ಹೇಳುವದೇನಂದರೆ-- ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥವಾದ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು.

12:37b.MAT.012.037 ನೀನು ನಿನ್ನ ಮಾತುಗಳಿಂದಲೇ ನೀತಿವಂತನಾಗುವಿ ಮತ್ತು ನಿನ್ನ ಮಾತುಗಳಿಂದಲೇ ನೀನು ಅಪರಾಧಿಯಾಗುವಿ ಎಂದು ಹೇಳಿದನು.

12:38b.MAT.012.038 ಆಗ ಶಾಸ್ತ್ರಿಗಳಲ್ಲಿ ಮತ್ತು ಫರಿಸಾಯರಲ್ಲಿ ಕೆಲ ವರು--ಗುರುವೇ, ನಿನ್ನಿಂದ ಒಂದು ಸೂಚಕಕಾರ್ಯ ವನ್ನು ನೋಡಬೇಕೆಂದಿದ್ದೇವೆ ಎಂದು ಕೇಳಿದ್ದಕ್ಕೆ

12:39b.MAT.012.039 ಆತನು ಪ್ರತ್ಯುತ್ತರವಾಗಿ ಅವರಿಗೆ--ವ್ಯಭಿಚಾರಿಣಿ ಯಾದ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡು ಕುತ್ತದೆ; ಪ್ರವಾದಿಯಾದ ಯೋನನಲ್ಲಿ ಆದ ಸೂಚಕ ಕಾರ್ಯವೇ ಹೊರತು ಅದಕ್ಕೆ ಇನ್ಯಾವ ಸೂಚಕಕಾರ್ಯ ವೂ ಕೊಡಲ್ಪಡುವದಿಲ್ಲ.

12:40b.MAT.012.040 ಯಾಕಂದರೆ ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ಮಾನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಕುಮಾರನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭ ದಲ್ಲಿರುವನು.

12:41b.MAT.012.041 ನ್ಯಾಯವಿಚಾರಣೆಯಲ್ಲಿ ನಿನೆವೆಯ ಜನರು ಈ ಸಂತತಿಯೊಂದಿಗೆ ಎದ್ದು ಅವರನ್ನು ಖಂಡಿಸು ವರು; ಯಾಕಂದರೆ ಯೋನನು ಸಾರಿದಾಗ ಅವರು ಮಾನಸಾಂತರಪಟ್ಟರು; ಮತ್ತು ಇಗೋ, ಇಲ್ಲಿ ಯೋನ ನಿಗಿಂತಲೂ ದೊಡ್ಡವನಿದ್ದಾನೆ.

12:42b.MAT.012.042 ನ್ಯಾಯವಿಚಾರಣೆ ಯಲ್ಲಿ ದಕ್ಷಿಣದ ರಾಣಿಯು ಈ ಸಂತತಿಯವರೊಂದಿಗೆ ಎದ್ದು ಇವರನ್ನು ಖಂಡಿಸುವಳು; ಯಾಕಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿ ಯ ಕಟ್ಟಕಡೆಯಿಂದ ಬಂದಳು; ಇಗೋ, ಇಲ್ಲಿ ಸೊಲೊ ಮೋನನಿಗಿಂತಲೂ ದೊಡ್ಡವನಿದ್ದಾನೆ.

12:43b.MAT.012.043 ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದ ಮೇಲೆ ನೀರಿಲ್ಲದ ಸ್ಥಳಗಳಲ್ಲಿ ವಿಶ್ರಾಂತಿಗಾಗಿ ತಿರುಗಾಡಿದರೂ ಅದನ್ನು ಕಂಡುಕೊಳ್ಳಲಿಲ್ಲ.

12:44b.MAT.012.044 ಆಗ ಅದು--ನಾನು ಹೊರಟುಬಂದ ನನ್ನ ಮನೆಗೆ ಹಿಂತಿರುಗುವೆನು ಎಂದು ಅಂದುಕೊಂಡು ಬಂದು ಅದು ಬರಿದಾಗಿಯೂ ಗುಡಿಸಿ ಅಲಂಕರಿಸಲ್ಪಟ್ಟದ್ದಾ ಗಿಯೂ ಇರುವದನ್ನು ಕಂಡಿತು.

12:45b.MAT.012.045 ತರುವಾಯ ಅದು ಹೋಗಿ ತನಗಿಂತ ಕೆಟ್ಟವುಗಳಾಗಿರುವ ಬೇರೆ ಏಳು ಆತ್ಮಗಳನ್ನು ಕರಕೊಂಡು ಅವು ಅದರೊಳಗೆ ಪ್ರವೇಶಿಸಿ ವಾಸಮಾಡುತ್ತವೆ; ಹೀಗೆ ಆ ಮನುಷ್ಯನ ಕಡೇ ಸ್ಥಿತಿಯು ಮೊದಲಿಗಿಂತಲೂ ಕೆಟ್ಟದ್ದಾಗಿರುವದು. ಅದರಂತೆಯೇ ಈ ಕೆಟ್ಟ ಸಂತತಿಗೂ ಆಗುವದು ಎಂದು ಹೇಳಿದನು.

12:46b.MAT.012.046 ಆತನು ಇನ್ನೂ ಜನರ ಸಂಗಡ ಮಾತನಾಡು ತ್ತಿದ್ದಾಗ ಇಗೋ, ಆತನ ತಾಯಿಯೂ ಆತನ ಸಹೋದರರೂ ಆತನೊಂದಿಗೆ ಮಾತನಾಡಬೇಕೆಂದು ಅಪೇಕ್ಷಿಸಿ ಹೊರಗೆ ನಿಂತಿದ್ದರು.

12:47b.MAT.012.047 ಆಗ ಒಬ್ಬನು ಆತನಿಗೆ--ಇಗೋ, ನಿನ್ನ ತಾಯಿಯೂ ನಿನ್ನ ಸಹೋ ದರರೂ ನಿನ್ನೊಂದಿಗೆ ಮಾತನಾಡಲು ಅಪೇಕ್ಷಿಸಿ ಹೊರಗೆ ನಿಂತಿದ್ದಾರೆ ಅಂದನು.

12:48b.MAT.012.048 ಅದಕ್ಕೆ ಆತನು ತನಗೆ ಹೇಳಿದವನಿಗೆ ಪ್ರತ್ಯುತ್ತರವಾಗಿ--ನನ್ನ ತಾಯಿ ಯಾರು? ಮತ್ತು ನನ್ನ ಸಹೋದರರು ಯಾರು? ಎಂದು ಹೇಳಿ ಶಿಷ್ಯರ ಕಡೆಗೆ ತನ್ನ ಕೈಚಾಚಿ--

12:49b.MAT.012.049 ಇಗೋ, ನನ್ನ ತಾಯಿಯು ಮತ್ತು ನನ್ನ ಸಹೋದರರು!ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ನನ್ನ ಸಹೋದರನೂ ಸಹೋದರಿ ಯೂ ತಾಯಿಯೂ ಆಗಿದ್ದಾರೆ ಅಂದನು.

12:50b.MAT.012.050 ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ನನ್ನ ಸಹೋದರನೂ ಸಹೋದರಿ ಯೂ ತಾಯಿಯೂ ಆಗಿದ್ದಾರೆ ಅಂದನು.

13

13:1b.MAT.013.001 ಅದೇ ದಿನದಲ್ಲಿ ಯೇಸು ಆ ಮನೆಯಿಂ ಹೊರಟುಹೋಗಿ ಸಮುದ್ರದ ಬಳಿಯಲಿ ಕೂತುಕೊಂಡನು.

13:2b.MAT.013.002 ಆಗ ಜನರ ದೊಡ್ಡ ಸಮೂಹಗಳು ಆತನ ಬಳಿಗೆ ಕೂಡಿ ಬಂದದ್ದರಿಂದ ಆತನು ದೋಣಿ ಯನ್ನು ಹತ್ತಿ ಕೂತುಕೊಂಡನು. ಮತ್ತು ಆ ಸಮೂಹ ದವರೆಲ್ಲಾ ದಡದ ಮೇಲೆ ನಿಂತಿದ್ದರು.

13:3b.MAT.013.003 ಆಗ ಆತನು ಅನೇಕ ವಿಷಯಗಳನ್ನು ಅವರಿಗೆ ಸಾಮ್ಯಗಳಲ್ಲಿ ಹೇಳಿದ್ದೇನಂದರೆ--ಇಗೋ, ಬಿತ್ತುವವನು ಬಿತ್ತುವದಕ್ಕೆ ಹೊರಟನು.

13:4b.MAT.013.004 ಅವನು ಬಿತ್ತಿದಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು; ಆಗ ಪಕ್ಷಿಗಳು ಬಂದು ಅವು ಗಳನ್ನು ನುಂಗಿಬಿಟ್ಟವು.

13:5b.MAT.013.005 ಕೆಲವು ಬಹಳ ಮಣ್ಣಿಲ್ಲದ ಬಂಡೆಯ ಸ್ಥಳಗಳಲ್ಲಿ ಬಿದ್ದವು; ಅಲ್ಲಿ ಆಳವಾದ ಮಣ್ಣು ಇಲ್ಲದ್ದರಿಂದ ತಕ್ಷಣವೇ ಅವು ಮೊಳೆತವು;

13:6b.MAT.013.006 ಆದರೆ ಸೂರ್ಯನು ಮೇಲಕ್ಕೆ ಬಂದಾಗ ಅವು ಬಾಡಿಹೋಗಿ ಅವುಗಳಿಗೆ ಬೇರು ಇಲ್ಲದ್ದರಿಂದ ಒಣಗಿಹೋದವು.

13:7b.MAT.013.007 ಮತ್ತು ಕೆಲವು ಮುಳ್ಳುಗಳಲ್ಲಿ ಬಿದ್ದವು; ಆಗ ಆ ಮುಳ್ಳುಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.

13:8b.MAT.013.008 ಆದರೆ ಬೇರೆಯವುಗಳು ಒಳ್ಳೆಯ ಭೂಮಿಯಲ್ಲಿ ಬಿದ್ದು ಕೆಲವು ನೂರರಷ್ಟು ಕೆಲವು ಅರವತ್ತರಷ್ಟು ಕೆಲವು ಮೂವತ್ತರಷ್ಟು ಫಲಕೊಟ್ಟವು.

13:9b.MAT.013.009 ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.

13:10b.MAT.013.010 ತರುವಾಯ ಶಿಷ್ಯರು ಬಂದು ಆತನಿಗೆ--ನೀನು ಸಾಮ್ಯಗಳಲ್ಲಿ ಅವರೊಂದಿಗೆ ಯಾಕೆ ಮಾತನಾಡುತ್ತೀ ಎಂದು ಕೇಳಲು

13:11b.MAT.013.011 ಆತನು ಪ್ರತ್ಯುತ್ತರವಾಗಿ ಅವ ರಿಗೆ--ಪರಲೋಕರಾಜ್ಯದ ಮರ್ಮಗಳನ್ನು ತಿಳುಕೊಳ್ಳು ವದಕ್ಕೆ ನಿಮಗೆ ಕೊಡಲ್ಪಟ್ಟಿದೆ; ಆದರೆ ಅವರಿಗೆ ಕೊಡ ಲ್ಪಟ್ಟಿಲ್ಲ.

13:12b.MAT.013.012 ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಮತ್ತು ಅವನಿಗೆ ಹೆಚ್ಚು ಸಮೃದ್ಧಿಯಾಗುವದು; ಆದರೆ ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವದು.

13:13b.MAT.013.013 ಆದದರಿಂದ ನಾನು ಅವರಿಗೆ ಸಾಮ್ಯಗಳಲ್ಲಿ ಮಾತ ನಾಡುತ್ತೇನೆ; ಯಾಕಂದರೆ ಅವರು ನೋಡಿದರೂ ಕಾಣುವದಿಲ್ಲ ಮತ್ತು ಕೇಳಿದರೂ ತಿಳುಕೊಳ್ಳುವದಿಲ್ಲ; ಇಲ್ಲವೆ ಅವರು ಗ್ರಹಿಸುವದು ಇಲ್ಲ

13:14b.MAT.013.014 ಹೀಗೆ ಯೆಶಾಯನ ಪ್ರವಾದನೆಯು ಅವರಲ್ಲಿ ನೆರವೇರಿತು. ಅದೇನಂದರೆ -- ನೀವು ಕೇಳುತ್ತೀರಿ, ಕೇಳಿದರೂ ತಿಳು ಕೊಳ್ಳುವದೇ ಇಲ್ಲ; ಮತ್ತು ನೋಡುತ್ತೀರಿ, ನೋಡಿ ದರೂ ಗ್ರಹಿಸುವದೇ ಇಲ್ಲ.

13:15b.MAT.013.015 ಯಾಕಂದರೆ ಇವರು ತಮ್ಮ ಕಣ್ಣುಗಳಿಂದ ನೋಡಿ ತಮ್ಮ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದ ಹಾಗೆಯೂ ನಾನು ಇವರನ್ನು ಸ್ವಸ್ಥಮಾಡದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಮತ್ತು ಇವರ ಕಿವಿಗಳು ಕೇಳದ ಹಾಗೆ ಮಂದವಾದವು; ಇದಲ್ಲದೆ ಇವರು ತಮ್ಮ ಕಣ್ಣುಗ

13:16b.MAT.013.016 ಆದರೆ ನಿಮ್ಮ ಕಣ್ಣುಗಳು ನೋಡುವದ ರಿಂದಲೂ ನಿಮ್ಮ ಕಿವಿಗಳು ಕೇಳುವದರಿಂದಲೂ ಅವು ಧನ್ಯವಾದವುಗಳೇ.

13:17b.MAT.013.017 ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ನೀವು ನೋಡುವಂಥವುಗಳನ್ನು ಮತ್ತು ಕೇಳುವಂಥವುಗಳನ್ನು ಅನೇಕ ಪ್ರವಾದಿಗಳು ಮತ್ತು ನೀತಿವಂತರು ನೋಡುವದಕ್ಕೂ ಕೇಳುವದಕ್ಕೂ ಅಪೇಕ್ಷಿಸಿದರು; ಆದರೆ ಅವರು ನೋಡಲಿಲ್ಲ ಮತ್ತು ಕೇಳಲಿಲ್ಲ.

13:18b.MAT.013.018 ಆದದರಿಂದ ಬಿತ್ತುವವನ ಸಾಮ್ಯದ ವಿಷಯವಾಗಿ ನೀವು ಕೇಳಿರಿ:

13:19b.MAT.013.019 ಯಾವನಾದರೂ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ ಕೆಡುಕನು ಬಂದು ಅವನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಬಿಡು ವನು; ದಾರಿಯ ಮಗ್ಗುಲಲ್ಲಿ ಬೀಜವನ್ನು ಅಂಗೀಕರಿ ಸಿದವನು ಇವನೇ.

13:20b.MAT.013.020 ಮತ್ತು ಬಂಡೆಯ ಸ್ಥಳಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಇವನೇ; ಇವನು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಅಂಗೀಕರಿಸುತ್ತಾನೆ;

13:21b.MAT.013.021 ಆದರೂ ಅವನಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇರುವನು; ಯಾಕಂದರೆ ವಾಕ್ಯಕ್ಕಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ ತಕ್ಷಣವೇ ಅವನು ಅಭ್ಯಂತರ ಪಡುವನು.

13:22b.MAT.013.022 ಮುಳ್ಳುಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಸಹ ಇವನೇ; ಇವನು ವಾಕ್ಯವನ್ನು ಕೇಳುತ್ತಾನೆ; ಆದರೆ ಈ ಪ್ರಪಂಚದ ಚಿಂತೆಯೂ ಐಶ್ವರ್ಯದ ಮೋಸವೂ ವಾಕ್ಯವನ್ನು ಅಡಗಿಸುವ ದರಿಂದ ಅವನು ಫಲ ಕೊಡಲಾರನು.

13:23b.MAT.013.023 ಆದರೆ ಒಳ್ಳೇ ಭೂಮಿಯಲ್ಲಿ ಬೀಜ ವನ್ನು ಅಂಗೀಕರಿಸಿದವನು ಇವನೇ; ಇವನು ವಾಕ್ಯ ವನ್ನು ಕೇಳಿ ಅದನು ಗ್ರಹಿಸುತ್ತಾನೆ; ಇವನೇ ಫಲಫಲಿ ಸುವವನಾಗಿ ನೂರರಷ್ಟು ಅರವತ್ತರಷ್ಟು ಮತ್ತು ಮೂವತ್ತರಷ್ಟು ಫಲವನ್ನು ಕೊಡುತ್ತಾನೆ.

13:24b.MAT.013.024 ಆತನು ಮತ್ತೊಂದು ಸಾಮ್ಯವನ್ನು ಹೇಳಿದ್ದೇ ನಂದರೆ--ಪರಲೋಕ ರಾಜ್ಯವು ಒಳ್ಳೇ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ್ದ ಒಬ್ಬ ಮನುಷ್ಯನಿಗೆ ಹೋಲಿಕೆ ಯಾಗಿದೆ.

13:25b.MAT.013.025 ಹೇಗಂದರೆ ಜನರು ನಿದ್ರೆ ಮಾಡುತ್ತಿದ್ದಾಗ ಅವನ ವೈರಿಯು ಬಂದು ಗೋದಿಯ ನಡುವೆ ಹಣಜಿ ಯನ್ನು ಬಿತ್ತಿ ಹೊರಟು ಹೋದನು.

13:26b.MAT.013.026 ಅದು ಮೊಳೆತು ಫಲಕೊಟ್ಟಾಗ ಹಣಜಿ ಸಹ ಕಾಣಿಸಿ ಕೊಂಡಿತು.

13:27b.MAT.013.027 ಆದದರಿಂದ ಮನೇಯಜಮಾನನ ಸೇವಕರು ಅವನ ಬಳಿಗೆ ಬಂದು ಅವನಿಗೆ--ಅಯ್ಯಾ, ನೀನು ನಿನ್ನ ಹೊಲದಲ್ಲಿ ಒಳ್ಳೇ ಬೀಜವನ್ನು ಬಿತ್ತಿದಿ ಯಲ್ಲಾ? ಹಾಗಾದರೆ ಈ ಹಣಜಿಯು ಎಲ್ಲಿಂದ ಬಂತು ಎಂದು ಕೇಳಿದರು.

13:28b.MAT.013.028 ಅವನು ಅವರಿಗೆ--ಒಬ್ಬ ವೈರಿ ಯು ಇದನ್ನು ಮಾಡಿದ್ದಾನೆ ಅಂದನು. ಆದರೆ ಸೇವಕರು ಅವನಿಗೆ--ಹಾಗಾದರೆ ನಾವು ಹೋಗಿ ಅವುಗಳನ್ನು ಕೂಡಿಸುವಂತೆ ನೀನು ಇಷ್ಟಪಡುತ್ತೀಯೋ ಎಂದು ಕೇಳಿದರು.

13:29b.MAT.013.029 ಆದರೆ ಅವನು--ಬೇಡ, ನೀವು ಹಣಜಿಯನ್ನು ಕೂಡಿಸುವಾಗ ಅವುಗಳೊಂದಿಗೆ ಗೋದಿಯನ್ನೂ ಕಿತ್ತೀರಿ.

13:30b.MAT.013.030 ಸುಗ್ಗೀಕಾಲದ ವರೆಗೆ ಎರಡೂ ಜೊತೆಯಲ್ಲಿ ಬೆಳೆಯಲಿ; ಸುಗ್ಗೀಕಾಲದಲ್ಲಿ ನಾನು ಕೊಯ್ಯುವವರಿಗೆ--ಮೊದಲು ಹಣಜಿಯನ್ನು ಕೂಡಿಸಿ ಅದನ್ನು ಸುಡುವದಕ್ಕೆ ಹೊರೆ ಕಟ್ಟಿರಿ; ಆದರೆ ಗೋದಿಯನ್ನು ನನ್ನ ಕಣಜದಲ್ಲಿ ಕೂಡಿಸಿರಿ ಎಂದು ಹೇಳುವೆನು ಅಂದನು.

13:31b.MAT.013.031 ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಮನುಷ್ಯನು ತಕ್ಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದ್ದ ಸಾಸಿವೆ ಕಾಳಿಗೆ ಪರಲೋಕರಾಜ್ಯವು ಹೋಲಿಕೆಯಾಗಿದೆ.

13:32b.MAT.013.032 ಅದು ಎಲ್ಲಾ ಬೀಜಗಳಿಗಿಂತಲೂ ಚಿಕ್ಕದಾದದ್ದೇ ನಿಜ; ಆದರೆ ಅದು ಬೆಳೆದಾಗ ಎಲ್ಲಾ ಸಸಿಗಳಿಗಿಂತಲೂ ದೊಡ್ಡದಾಗಿ ಮರವಾಯಿತು. ಹೀಗೆ ಆಕಾಶದ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ವಾಸಮಾಡುತ್ತವೆ.

13:33b.MAT.013.033 ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಸ್ತ್ರೀಯು ಹುಳಿಯನ್ನು ತಕ್ಕೊಂಡು ಮೂರು ಸೇರು ಹಿಟ್ಟೆಲ್ಲಾ ಹುಳಿಯಾಗುವ ತನಕ ಅದರಲ್ಲಿ ಅಡಗಿಸಿಟ್ಟ ಹುಳಿಗೆ ಪರಲೋಕ ರಾಜ್ಯವು ಹೋಲಿಕೆಯಾಗಿದೆ.

13:34b.MAT.013.034 ಯೇಸು ಇವೆಲ್ಲವುಗಳನ್ನು ಜನಸಮೂಹ ದೊಂದಿಗೆ ಸಾಮ್ಯಗಳಲ್ಲಿ ಮಾತನಾಡಿದನು; ಸಾಮ್ಯ ವಿಲ್ಲದೆ ಆತನು ಅವರೊಂದಿಗೆ ಮಾತನಾಡಲಿಲ್ಲ.

13:35b.MAT.013.035 ಹೀಗೆ--ಸಾಮ್ಯಗಳನ್ನು ಹೇಳುವಂತೆ ನನ್ನ ಬಾಯಿ ತೆರೆಯುವೆನು; ಲೋಕದ ಅಸ್ತಿವಾರದಿಂದ ಮರೆಯಾಗಿ ಇಡಲ್ಪಟ್ಟವುಗಳನ್ನು ನಾನು ಹೊರಪಡಿಸುವೆನು ಎಂದು ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರಿತು.

13:36b.MAT.013.036 ತರುವಾಯ ಯೇಸು ಜನಸಮೂಹವನ್ನು ಕಳು ಹಿಸಿಬಿಟ್ಟು ಮನೆಯೊಳಕ್ಕೆ ಹೋದನು; ಆಗ ಶಿಷ್ಯರು ಆತನ ಬಳಿಗೆ ಬಂದು ಆತನಿಗೆ--ಹೊಲದ ಹಣಜಿಯ ಸಾಮ್ಯವನ್ನು ನಮಗೆ ವಿವರಿಸು ಅಂದರು.

13:37b.MAT.013.037 ಆತನು ಪ್ರತ್ಯುತ್ತರವಾಗಿ ಅವರಿಗೆ-- ಒಳ್ಳೇ ಬೀಜ ಬಿತ್ತುವ ವನು ಮನುಷ್ಯಕುಮಾರನು;

13:38b.MAT.013.038 ಹೊಲವು ಈ ಲೋಕ; ಒಳ್ಳೇ ಬೀಜವು ರಾಜ್ಯದ ಮಕ್ಕಳಾಗಿದ್ದಾರೆ; ಆದರೆ ಹಣಜಿಯು ಕೆಡುಕನ ಮಕ್ಕಳಾಗಿದ್ದಾರೆ.

13:39b.MAT.013.039 ಅದನ್ನು ಬಿತ್ತಿದ ವೈರಿಯು ಸೈತಾನನೇ; ಸುಗ್ಗೀ ಕಾಲವು ಲೋಕದ ಅಂತ್ಯವಾಗಿದೆ; ಮತ್ತು ಕೊಯ್ಯುವವರು ದೂತರೇ.

13:40b.MAT.013.040 ಹೇಗೆ ಹಣಜಿಯನ್ನು ಕೂಡಿಸಿ ಬೆಂಕಿಯಲ್ಲಿ ಸುಡು ವರೋ ಹಾಗೆಯೇ ಈ ಲೋಕಾಂತ್ಯದಲ್ಲಿ ಆಗುವದು.

13:41b.MAT.013.041 ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿ ಸುವನು; ಅವರು ಆತಂಕ ಮಾಡುವ ಎಲ್ಲವುಗಳನ್ನೂ ದುಷ್ಟತನ ಮಾಡುವವರನ್ನೂ ಆತನ ರಾಜ್ಯದೊಳಗಿಂದ ಕೂಡಿಸಿ ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು;

13:42b.MAT.013.042 ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.

13:43b.MAT.013.043 ತರುವಾಯ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ.

13:44b.MAT.013.044 ಪರಲೋಕರಾಜ್ಯವು ಹೊಲದಲ್ಲಿ ಬಚ್ಚಿಟ್ಟಿದ ಸಂಪತ್ತಿಗೆ ಹೋಲಿಕೆಯಾಗಿದೆ; ಅದನ್ನು ಒಬ್ಬ ಮನು ಷ್ಯನು ಕಂಡುಕೊಂಡು ಬಚ್ಚಿಟ್ಟು ಅದರ ಸಂತೋಷದ ನಿಮಿತ್ತ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಳ್ಳುತ್ತಾನೆ.

13:45b.MAT.013.045 ಪರಲೋಕರಾಜ್ಯವು ಒಳ್ಳೇ ಮುತ್ತುಗಳನ್ನು ಹುಡುಕುವ ವ್ಯಾಪಾರಸ್ಥನಿಗೆ ಹೋಲಿಕೆಯಾಗಿದೆ.

13:46b.MAT.013.046 ಅವನು ಬಹು ಬೆಲೆಯುಳ್ಳ ಒಂದು ಮುತ್ತನ್ನು ಕಂಡುಕೊಂಡು ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಅದನ್ನು ಕೊಂಡುಕೊಂಡನು.

13:47b.MAT.013.047 ಪರಲೋಕರಾಜ್ಯವು ಸಮುದ್ರದಲ್ಲಿ ಬೀಸಲ್ಪಟ್ಟು ಎಲ್ಲಾ ತರವಾದದ್ದನ್ನು (ಮಾನುಗಳನ್ನು) ಕೂಡಿಸಿದ ಬಲೆಗೆ ಹೋಲಿಕೆಯಾಗಿದೆ.

13:48b.MAT.013.048 ಅದು ತುಂಬಿದಾಗ ಅವರು ಅದನ್ನು ದಡಕ್ಕೆ ಎಳೆದು ಕೂತುಕೊಂಡು ಒಳ್ಳೆಯವುಗಳನ್ನು ಪಾತ್ರೆಗಳಲ್ಲಿ ತುಂಬಿಸಿ ಕೆಟ್ಟವುಗಳನ್ನು ಹೊರಗೆ ಬಿಸಾಡಿದರು.

13:49b.MAT.013.049 ಹಾಗೆಯೇ ಲೋಕಾಂತ್ಯ ದಲ್ಲಿ ಇರುವದು; ದೂತರು ಹೊರಟುಬಂದು ನೀತಿವಂತರ ಮಧ್ಯದಿಂದ ಕೆಡುಕರನ್ನು ಪ್ರತ್ಯೇಕಿಸುವರು.

13:50b.MAT.013.050 ಮತ್ತು ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು ಎಂದು ಹೇಳಿದನು.

13:51b.MAT.013.051 ಇದಲ್ಲದೆ ಯೇಸು ಅವರಿಗೆ--ಇವುಗಳನ್ನೆಲ್ಲಾ ನೀವು ಗ್ರಹಿಸಿದ್ದೀರಾ ಎಂದು ಕೇಳಿದ್ದಕ್ಕೆ ಅವರು ಆತ ನಿಗೆ--ಕರ್ತನೇ, ಹೌದು ಎಂದು ಹೇಳಿದರು.

13:52b.MAT.013.052 ಆತನು ಅವರಿಗೆ--ಆದಕಾರಣ ಪರಲೋಕ ರಾಜ್ಯದ ವಿಷಯವಾಗಿ ಶಿಕ್ಷಣಹೊಂದಿದ ಪ್ರತಿಯೊಬ್ಬ ಶಾಸ್ತ್ರಿಯು ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೇ ಯಜಮಾನನಿಗೆ ಹೋಲಿಕೆಯಾಗಿದ್ದಾನೆ ಅಂದನು.

13:53b.MAT.013.053 ಈ ಸಾಮ್ಯಗಳನ್ನು ಮುಗಿಸಿದ ತರುವಾಯ ಯೇಸು ಅಲ್ಲಿಂದ ಹೊರಟುಹೋದನು.

13:54b.MAT.013.054 ಆತನು ತನ್ನ ಸ್ವಂತ ದೇಶಕ್ಕೆ ಬಂದು ಅವರ ಸಭಾಮಂದಿರ ದಲ್ಲಿ ಅವರಿಗೆ ಬೋಧಿಸಿದ್ದರಿಂದ ಅವರು ವಿಸ್ಮಯ ಗೊಂಡು--ಈ ಜ್ಞಾನವೂ ಈ ಮಹತ್ಕಾರ್ಯಗಳೂ ಈತನಿಗೆ ಎಲ್ಲಿಂದ ಬಂದಿದ್ದಾವು?

13:55b.MAT.013.055 ಈತನು ಬಡಗಿ ಯ ಮಗನಲ್ಲವೇ? ಮರಿಯಳೆಂದು ಕರೆಯಲ್ಪಡು ವವಳು ಈತನ ತಾಯಿಯಲ್ಲವೇ? ಮತ್ತು ಯಾಕೋಬ, ಯೋಸೇಫ, ಸೀಮೋನ, ಯೂದ ಈತನ ಸಹೋದರ ರಲ್ಲವೇ?

13:56b.MAT.013.056 ಈತನ ಸಹೋದರಿಯರೆಲ್ಲರೂ ನಮ್ಮೊಂ ದಿಗೆ ಇದ್ದಾರಲ್ಲವೇ? ಹಾಗಾದರೆ ಇವೆಲ್ಲವುಗಳು ಈ ಮನುಷ್ಯನಿಗೆ ಎಲ್ಲಿಂದ ಬಂದಿದ್ದಾವೆಂದು ಅಂದು ಕೊಂಡರು.

13:57b.MAT.013.057 ಅವರು ಆತನ ವಿಷಯದಲ್ಲಿ ಅಭ್ಯಂತರ ಪಟ್ಟರು. ಆದರೆ ಯೇಸು ಅವರಿಗೆ--ಪ್ರವಾದಿಗೆ ಮತ್ತೆಲ್ಲಿಯಾದರೂ ಸನ್ಮಾನವಿದೆ, ಆದರೆ ತನ್ನ ಸ್ವಂತ ದೇಶದಲ್ಲಿ ತನ್ನ ಸ್ವಂತ ಮನೆಯಲ್ಲಿ ಮಾತ್ರ ಇಲ್ಲ ಅಂದನು.ಆತನು ಅವರ ಅಪನಂಬಿಕೆಯ ದೆಸೆ ಯಿಂದ ಅಲ್ಲಿ ಬಹಳ ಮಹತ್ಕಾರ್ಯಗಳನ್ನು ನಡಿಸಲಿಲ್ಲ.

13:58b.MAT.013.058 ಆತನು ಅವರ ಅಪನಂಬಿಕೆಯ ದೆಸೆ ಯಿಂದ ಅಲ್ಲಿ ಬಹಳ ಮಹತ್ಕಾರ್ಯಗಳನ್ನು ನಡಿಸಲಿಲ್ಲ.

14

14:1b.MAT.014.001 ಆ ಕಾಲದಲ್ಲಿ ಚತುರಾಧಿಪತಿಯಾದ ಹೆರೋದನು ಯೇಸುವಿನ ಕೀರ್ತಿಯನ್ನು ಕೇಳಿ ತನ್ನ ಸೇವಕರಿಗೆ --

14:2b.MAT.014.002 ಇವನು ಬಾಪ್ತಿಸ್ಮ ಮಾಡಿಸುವ ಯೋಹಾನನೇ; ಈಗ ಇವನು ಸತ್ತವರೊಳಗಿಂದ ಎದ್ದಿದ್ದಾನೆ; ಆದದರಿಂದಲೇ ಮಹತ್ಕಾರ್ಯಗಳು ಇವನಲ್ಲಿ ತೋರಿಬರುತ್ತವೆ ಎಂದು ಹೇಳಿದನು.

14:3b.MAT.014.003 ಯಾಕಂದರೆ ಹೆರೋದನು ತನ್ನ ಸಹೋದರನಾದ ಫಿಲಿಪ್ಪನ ಹೆಂಡತಿಯಾಗಿದ್ದ ಹೆರೋದ್ಯಳ ನಿಮಿತ್ತವಾಗಿ ಯೋಹಾನನನ್ನು ಹಿಡಿದು ಕಟ್ಟಿ ಸೆರೆಯಲ್ಲಿ ಹಾಕಿದ್ದನು.

14:4b.MAT.014.004 ಯಾಕಂದರೆ ಯೋಹಾನನು--ನೀನು ಅವಳನ್ನು ಇಟ್ಟುಕೊಂಡಿರುವದು ನಿನಗೆ ನ್ಯಾಯವಲ್ಲ ಎಂದು ಅವನಿಗೆ ಹೇಳಿದ್ದನು.

14:5b.MAT.014.005 ಆದದರಿಂದ ಅವನು ಯೋಹಾನನನ್ನು ಕೊಲ್ಲಬೇಕೆಂದಿದ್ದಾಗ ಜನ ಸಮೂಹಕ್ಕೆ ಭಯಪಟ್ಟನು; ಯಾಕಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು.

14:6b.MAT.014.006 ಆದರೆ ಹೆರೋದನ ಹುಟ್ಟಿದ ದಿನವು ಆಚರಿಸಲ್ಪಟ್ಟಾಗ ಹೆರೋದ್ಯಳ ಮಗಳು ಅವರ ಮುಂದೆ ನಾಟ್ಯವಾಡಿ ಹೆರೋದನನ್ನು ಮೆಚ್ಚಿಸಿದಳು.

14:7b.MAT.014.007 ಆದದರಿಂದ ಅವಳು ಏನು ಕೇಳಿಕೊಂಡರೂ ಅವಳಿಗೆ ಕೊಡುವೆನೆಂದು ಅವನು ಆಣೆಯಿಟ್ಟು ವಾಗ್ದಾನಮಾಡಿದನು.

14:8b.MAT.014.008 ಅವಳು ತನ್ನ ತಾಯಿಯಿಂದ ಮೊದಲೇ ಕಲಿಸಲ್ಪಟ್ಟವಳಾಗಿ-- ಬಾಪ್ತಿಸ್ಮ ಮಾಡಿಸುವ ಯೋಹಾನನ ತಲೆಯನ್ನು ಪರಾ ತಿನಲ್ಲಿ ಇಲ್ಲಿಯೇ ನನಗೆ ಕೊಡು ಎಂದು ಹೇಳಿದಳು.

14:9b.MAT.014.009 ಆಗ ಅರಸನು ದುಃಖಪಟ್ಟಾಗ್ಯೂ ತನ್ನ ಆಣೆಯ ನಿಮಿತ್ತದಿಂದಲೂ ತನ್ನೊಂದಿಗೆ ಊಟಕ್ಕೆ ಕೂತಿದ್ದವರ ನಿಮಿತ್ತದಿಂದಲೂ ಅದನ್ನು ಅವಳಿಗೆ ಕೊಡುವಂತೆ ಅಪ್ಪಣೆಕೊಟ್ಟನು.

14:10b.MAT.014.010 ಮತ್ತು ಅವನು (ಆಳುಗಳನ್ನು) ಕಳುಹಿಸಿ ಸೆರೆಯಲ್ಲಿ ಯೋಹಾನನ ತಲೆಯನ್ನು ಹೊಯಿಸಿದನು.

14:11b.MAT.014.011 ಇದಲ್ಲದೆ ಅವನ ತಲೆಯನ್ನು ಪರಾತಿನಲ್ಲಿ ತಂದು ಆ ಹುಡುಗಿಗೆ ಕೊಟ್ಟರು. ಅವಳು ಅದನ್ನು ತನ್ನ ತಾಯಿಯ ಬಳಿಗೆ ತಂದಳು.

14:12b.MAT.014.012 ಆಗ ಅವನ ಶಿಷ್ಯರು ಬಂದು ದೇಹವನ್ನೆತ್ತಿಕೊಂಡು ಹೂಣಿಟ್ಟು ಹೋಗಿ ಯೇಸುವಿಗೆ ತಿಳಿಸಿದರು.

14:13b.MAT.014.013 ಯೇಸು ಆ ವಿಷಯವನ್ನು ಕೇಳಿದಾಗ ದೋಣಿ ಯನ್ನು ಹತ್ತಿ ಅಲ್ಲಿಂದ ವಿಂಗಡವಾಗಿ ಅರಣ್ಯ ಸ್ಥಳಕ್ಕೆ ಹೊರಟುಹೋದನು. ಇದನ್ನು ಕೇಳಿ ಜನರು ಪಟ್ಟಣ ಗಳಿಂದ ಕಾಲು ನಡಿಗೆಯಾಗಿ ಆತನನ್ನು ಹಿಂಬಾಲಿ ಸಿದರು.

14:14b.MAT.014.014 ಆಗ ಯೇಸು ಹೊರಟುಹೋಗಿ ಜನರ ಮಹಾಸಮೂಹವನ್ನು ಕಂಡು ಅವರ ಮೇಲೆ ಕನಿಕರ ಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು.

14:15b.MAT.014.015 ಸಾಯಂಕಾಲವಾದಾಗ ಆತನ ಶಿಷ್ಯರು ಆತನ ಬಳಿಗೆ ಬಂದು--ಇದು ಅಡವಿಯ ಸ್ಥಳ, ಸಮಯವು ದಾಟಿತು; ಜನರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರವನ್ನು ಕೊಂಡುಕೊಳ್ಳುವಂತೆ ಅವರನ್ನು ಕಳುಹಿಸಿಬಿಡು ಅಂದರು.

14:16b.MAT.014.016 ಆದರೆ ಯೇಸು ಅವ ರಿಗೆ--ಅವರು ಹೋಗುವದು ಅವಶ್ಯವಿಲ್ಲ; ಅವರು ಊಟಮಾಡುವದಕ್ಕೆ ನೀವೇ ಕೊಡಿರಿ ಎಂದು ಹೇಳಿದನು.

14:17b.MAT.014.017 ಅವರು ಆತನಿಗೆ--ನಮ್ಮ ಹತ್ತಿರ ಐದು ರೊಟ್ಟಿ ಎರಡು ಮಾನುಗಳು ಮಾತ್ರ ಇವೆ ಎಂದು ಹೇಳಿದರು.

14:18b.MAT.014.018 ಆತನು--ಅವುಗಳನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಅಂದನು.

14:19b.MAT.014.019 ಜನ ಸಮೂಹವು ಹುಲ್ಲಿನಮೇಲೆ ಕೂತುಕೊಳ್ಳಬೇಕೆಂದು ಆತನು ಅಪ್ಪಣೆಕೊಟ್ಟು ಆ ಐದು ರೊಟ್ಟಿ ಎರಡು ಮಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ಮುರಿದು ಆ ರೊಟ್ಟಿಗಳನ್ನು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು.

14:20b.MAT.014.020 ಅವರೆಲ್ಲರೂ ತಿಂದು ತೃಪ್ತರಾದರು; ಮತ್ತು ಅವರು ಉಳಿದ ತುಂಡುಗಳನ್ನು ಕೂಡಿಸಿ ಹನ್ನೆ ರಡು ಪುಟ್ಟಿಗಳಲ್ಲಿ ತುಂಬಿಸಿದರು.

14:21b.MAT.014.021 ಊಟ ಮಾಡಿ ದವರು ಸ್ತ್ರೀಯರೂ ಮಕ್ಕಳೂ ಅಲ್ಲದೆ ಗಂಡಸರೇ ಹೆಚ್ಚು ಕಡಿಮೆ ಐದು ಸಾವಿರ ಇದ್ದರು.

14:22b.MAT.014.022 ಕೂಡಲೆ ಯೇಸು ತಾನು ಜನಸಮೂಹಗಳನ್ನು ಕಳುಹಿಸಿ ಬಿಡುವಷ್ಟರೊಳಗಾಗಿ ತನ್ನ ಶಿಷ್ಯರು ದೋಣಿ ಯನ್ನು ಹತ್ತಿ ತನಗಿಂತ ಮುಂಚೆ ಆಚೇ ದಡಕ್ಕೆ ಹೋಗ ಬೇಕೆಂದು ಅವರನ್ನು ಒತ್ತಾಯ ಮಾಡಿದನು.

14:23b.MAT.014.023 ಆತನು ಜನಸಮೂಹಗಳನ್ನು ಕಳುಹಿಸಿದ ಮೇಲೆ ಪ್ರಾರ್ಥನೆ ಮಾಡಲು ಏಕಾಂತವಾಗಿ ಗುಡ್ಡದ ಮೇಲೆ ಹೋದನು; ಸಾಯಂಕಾಲವಾದಾಗ ಆತನೊಬ್ಬನೇ ಅಲ್ಲಿ ಇದ್ದನು.

14:24b.MAT.014.024 ಆಗ ದೋಣಿಯು ಸಮುದ್ರದ ಮಧ್ಯದಲ್ಲಿದ್ದು ತೆರೆಗಳಿಂದ ಬಡಿಯಲ್ಪಡುತ್ತಿತ್ತು; ಯಾಕಂದರೆ ಗಾಳಿಯು ಎದುರಾಗಿತ್ತು.

14:25b.MAT.014.025 ಮತ್ತು ನಾಲ್ಕನೆಯ ಜಾವದಲ್ಲಿ ಯೇಸು ಸಮುದ್ರದ ಮೇಲೆ ನಡೆಯುತ್ತಾ ಅವರ ಬಳಿಗೆ ಹೋದನು.

14:26b.MAT.014.026 ಆತನು ಸಮುದ್ರದ ಮೇಲೆ ನಡೆಯುವದನ್ನು ಶಿಷ್ಯರು ನೋಡಿ ಕಳವಳಪಟ್ಟು--ಇದು ಭೂತ ಎಂದು ಭೀತಿಯಿಂದ ಕೂಗಿ ಕೊಂಡರು.

14:27b.MAT.014.027 ಆದರೆ ಯೇಸು ತಕ್ಷಣವೇ ಮಾತನಾಡಿ ಅವರಿಗೆ--ಧೈರ್ಯವಾಗಿರ್ರಿ; ನಾನೇ, ಭಯಪಡಬೇಡಿರಿಅಂದನು.

14:28b.MAT.014.028 ಆಗ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನೀನೇ ಆಗಿದ್ದರೆ ನೀರಿನ ಮೇಲೆ ನಡೆದು ನಿನ್ನ ಬಳಿಗೆ ಬರಲು ನನಗೆ ಅಪ್ಪಣೆಕೊಡು ಅಂದನು.

14:29b.MAT.014.029 ಅದಕ್ಕಾತನು--ಬಾ ಅಂದನು. ಆಗ ಪೇತ್ರನು ದೋಣಿಯಿಂದ ಇಳಿದು ಯೇಸುವಿನ ಬಳಿಗೆ ಹೋಗು ವದಕ್ಕಾಗಿ ನೀರಿನ ಮೇಲೆ ನಡೆದನು.

14:30b.MAT.014.030 ಆದರೆ ಬಲ ವಾದ ಗಾಳಿಯನ್ನು ನೋಡಿದಾಗ ಅವನು ಭಯಪಟ್ಟು ಮುಣುಗುತ್ತಾ--ಕರ್ತನೇ, ನನ್ನನ್ನು ರಕ್ಷಿಸು ಎಂದು ಕೂಗಿ ಹೇಳಿದನು.

14:31b.MAT.014.031 ತಕ್ಷಣವೇ ಯೇಸು ತನ್ನ ಕೈಯನ್ನು ಚಾಚಿ ಅವನನ್ನು ಹಿಡಿದು--ಓ ಅಲ್ಪ ವಿಶ್ವಾಸಿಯೇ, ನೀನು ಯಾಕೆ ಸಂದೇಹಪಟ್ಟೆ ಎಂದು ಅವನಿಗೆ ಹೇಳಿದನು.

14:32b.MAT.014.032 ಅವರು ದೋಣಿಯೊಳಗೆ ಬಂದಾಗ ಗಾಳಿನಿಂತು ಹೋಯಿತು.

14:33b.MAT.014.033 ದೋಣಿಯಲ್ಲಿದ್ದವರು ಆತನ ಬಳಿಗೆ ಬಂದು ಆತನನ್ನು ಆರಾಧಿಸಿ--ನಿಜವಾಗಿಯೂ ನೀನು ದೇವಕುಮಾರನೇ ಎಂದು ಹೇಳಿದರು.

14:34b.MAT.014.034 ಅವರು ದಾಟಿ ಗೆನೆಜರೇತ್‌ ಸೀಮೆಗೆ ಬಂದರು.

14:35b.MAT.014.035 ಆಗ ಅಲ್ಲಿದ್ದ ಜನರು ಆತನ ಗುರುತು ಹಿಡಿದು ಸುತ್ತ ಮುತ್ತಲಿನ ಸೀಮೆಗೆಲ್ಲಾ ಹೇಳಿಕಳುಹಿಸಿ ರೋಗಿಗಳ ನ್ನೆಲ್ಲಾ ಆತನ ಬಳಿಗೆ ತಂದರು.ಅವರು ಆತನ ಉಡು ಪಿನ ಅಂಚನ್ನಾದರೂ ಮುಟ್ಟುವಂತೆ ಆತನನ್ನು ಬೇಡಿ ಕೊಂಡರು; ಮತ್ತು ಯಾರಾರು ಮುಟ್ಟಿದರೋ ಅವರು ಸಂಪೂರ್ಣವಾಗಿ ಸ್ವಸ್ಥರಾದರು.

14:36b.MAT.014.036 ಅವರು ಆತನ ಉಡು ಪಿನ ಅಂಚನ್ನಾದರೂ ಮುಟ್ಟುವಂತೆ ಆತನನ್ನು ಬೇಡಿ ಕೊಂಡರು; ಮತ್ತು ಯಾರಾರು ಮುಟ್ಟಿದರೋ ಅವರು ಸಂಪೂರ್ಣವಾಗಿ ಸ್ವಸ್ಥರಾದರು.

15

15:1b.MAT.015.001 ತರುವಾಯ ಯೆರೂಸಲೇಮಿನವರಾದ ಶಾಸ್ತ್ರಿಗಳೂ ಫರಿಸಾಯರೂ ಯೇಸುವಿನ ಬಳಿಗೆ ಬಂದು--

15:2b.MAT.015.002 ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯ ವನ್ನು ಯಾಕೆ ಮಾರುತ್ತಾರೆ? ಯಾಕಂದರೆ ಅವರು ರೊಟ್ಟಿ ತಿನ್ನುವಾಗ ತಮ್ಮ ಕೈಗಳನ್ನು ತೊಳಕೊಳ್ಳುವದಿಲ್ಲ ಅಂದರು.

15:3b.MAT.015.003 ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವ ರಿಗೆ--ನೀವು ಸಹ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ಯಾಕೆ ಮಾರುತ್ತೀರಿ?

15:4b.MAT.015.004 ಯಾಕಂ ದರೆ ದೇವರು ಅಪ್ಪಣೆ ಕೊಟ್ಟು ಹೇಳಿದ್ದೇನಂದರೆ--ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು. ಮತ್ತು--ಯಾವನಾದರೂ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಶಪಿಸಿದರೆ ಅವನು ಸಾಯಲೇಬೇಕು ಎಂಬದೇ.

15:5b.MAT.015.005 ಆದರೆ ನೀವು--ಯಾವನಾದರೂ ತನ್ನ ತಂದೆಗಾಗಲೀ ತಾಯಿಗಾಗಲೀ-- ನನ್ನಿಂದ ನಿನಗೆ ಪ್ರಯೋಜನ ವಾಗತಕ್ಕದ್ದು ಕಾಣಿಕೆಯಾಯಿತು ಎಂದು ಹೇಳುವದಾ ದರೆ

15:6b.MAT.015.006 ಅವನು ತನ್ನ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಸನ್ಮಾನಿಸುವದರಿಂದ ಬಿಡುಗಡೆಯಾಗಿದ್ದಾನೆಂದು ನೀವು ಹೇಳುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ನಿರರ್ಥಕ ಮಾಡಿದ್ದೀರಿ.

15:7b.MAT.015.007 ಕಪಟಿಗಳೇ, ನಿಮ್ಮ ವಿಷಯವಾಗಿ ಯೆಶಾಯನು ಸರಿಯಾಗಿ ಪ್ರವಾದಿಸಿದನು;

15:8b.MAT.015.008 ಆದೇ ನಂದರೆ-- ಈ ಜನರು ತಮ್ಮ ಬಾಯಿಂದ ನನ್ನನ್ನು ಸಮಾಪಿಸಿ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ.

15:9b.MAT.015.009 ಅವರು ಮನುಷ್ಯರ ಆಜ್ಞೆಗಳನ್ನು ಬೋಧಿಸಿ ಕಲಿಸುವ ದರಿಂದ ನನ್ನನ್ನು ಆರಾಧಿಸುವದು ವ್ಯರ್ಥ ಎಂಬದೇ.

15:10b.MAT.015.010 ಆತನುಜನ ಸಮೂಹಗಳನ್ನು ಕರೆದು ಅವರಿಗೆ--ಕೇಳಿ ತಿಳುಕೊಳ್ಳಿರಿ;

15:11b.MAT.015.011 ಬಾಯೊಳಗೆ ಹೋಗುವಂಥದು ಮನುಷ್ಯನನ್ನು ಹೊಲೆಮಾಡುವದಿಲ್ಲ; ಆದರೆ ಬಾಯೊ ಳಗಿಂದ ಹೊರಗೆ ಬರುವಂಥದೇ ಮನುಷ್ಯನನ್ನು ಹೊಲೆಮಾಡುತ್ತದೆ ಎಂದು ಹೇಳಿದನು.

15:12b.MAT.015.012 ತರುವಾಯ ಆತನ ಶಿಷ್ಯರು ಬಂದು--ಫರಿಸಾ ಯರು ನಿನ್ನ ಈ ಮಾತನ್ನು ಕೇಳಿದ ಮೇಲೆ ಅಭ್ಯಂತರ ಪಟ್ಟರೆಂದು ನಿನಗೆ ತಿಳಿಯಿತೋ ಎಂದು ಕೇಳಿದರು.

15:13b.MAT.015.013 ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವರಿಗೆ--ಪರ ಲೋಕದ ನನ್ನ ತಂದೆಯು ನೆಡದೆ ಇರುವ ಪ್ರತಿಯೊ ಂದು ಗಿಡವು ಬೇರು ಸಹಿತವಾಗಿ ಕಿತ್ತುಹಾಕಲ್ಪಡುವದು.

15:14b.MAT.015.014 ಅವರನ್ನು ಬಿಡಿರಿ; ಅವರು ಕುರುಡರನ್ನು ನಡಿಸುವ ಕುರುಡರು. ಕುರುಡನು ಕುರುಡನನ್ನು ನಡಿಸಿದರೆ ಇಬ್ಬರೂ ಕುಣಿಯೊಳಕ್ಕೆ ಬೀಳುವರು ಎಂದು ಹೇಳಿ ದನು.

15:15b.MAT.015.015 ತರುವಾಯ ಪೇತ್ರನು ಪ್ರತ್ಯುತ್ತರವಾಗಿ ಆತ ನಿಗೆ--ಈ ಸಾಮ್ಯವನ್ನು ನಮಗೆ ತಿಳಿಯಪಡಿಸು ಅಂದನು.

15:16b.MAT.015.016 ಅದಕ್ಕೆ ಯೇಸು--ನೀವು ಸಹ ಇನ್ನೂ ಗ್ರಹಿಸದೆ ಇದ್ದೀರಾ?

15:17b.MAT.015.017 ಬಾಯೊಳಗೆ ಹೋಗಿ ಹೊಟ್ಟೆ ಯಲ್ಲಿ ಸೇರುವದೆಲ್ಲವೂ ಬಹಿರ್ಭೂಮಿಗೆ ಹೋಗುವ ದೆಂದು ನೀವು ಇನ್ನೂ ಗ್ರಹಿಸಲಿಲ್ಲವೋ?

15:18b.MAT.015.018 ಆದರೆ ಬಾಯೊಳಗಿಂದ ಹೊರಗೆ ಹೊರಡುವಂಥವುಗಳು ಹೃದಯದೊಳಗಿಂದ ಬಂದು ಮನುಷ್ಯನನ್ನು ಹೊಲೆ ಮಾಡುತ್ತವೆ.

15:19b.MAT.015.019 ಯಾಕಂದರೆ ಹೃದಯದೊಳಗಿಂದ ಕೆಟ್ಟ ಆಲೋಚನೆಗಳು, ಕೊಲೆಗಳು, ಹಾದರಗಳು, ಜಾರತ್ವ ಗಳು, ಕಳ್ಳತನಗಳು, ಸುಳ್ಳುಸಾಕ್ಷಿ, ದೇವ ದೂಷಣೆಗಳು ಹೊರಗೆ ಬರುತ್ತವೆ.

15:20b.MAT.015.020 ಇಂಥವುಗಳೇ ಮನುಷ್ಯನನ್ನು ಹೊಲೆಮಾಡುತ್ತವೆ; ಆದರೆ ಕೈತೊಳಕೊಳ್ಳದೆ ಊಟ ಮಾಡುವದು ಮನುಷ್ಯನನ್ನು ಹೊಲೆಮಾಡುವದಿಲ್ಲ ಅಂದನು.

15:21b.MAT.015.021 ತರುವಾಯ ಯೇಸು ಅಲ್ಲಿಂದ ಹೊರಟು ತೂರ್‌ ಸೀದೋನ್‌ ತೀರಗಳಿಗೆ ಬಂದನು.

15:22b.MAT.015.022 ಆಗ ಇಗೋ, ಕಾನಾನ್ಯಳಾದ ಒಬ್ಬ ಸ್ತ್ರೀಯು ಅದೇ ಪ್ರಾಂತ್ಯಗಳಿಂದ ಬಂದು ಆತನಿಗೆ--ಓ ಕರ್ತನೇ, ದಾವೀದನ ಕುಮಾ ರನೇ, ನನ್ನ ಮೇಲೆ ಕರುಣೆಯಿಡು; ನನ್ನ ಮಗಳು ದೆವ್ವದಿಂದ ಬಹಳವಾಗಿ ಸಂಕಟಪಡುತ್ತಿದ್ದಾಳೆ ಎಂದು ಕೂಗಿಕೊಂಡಳು.

15:23b.MAT.015.023 ಆದರೆ ಆತನು ಆಕೆಗೆ ಒಂದು ಮಾತೂ ಉತ್ತರ ಕೊಡಲಿಲ್ಲ; ಆಗ ಆತನ ಶಿಷ್ಯರು ಬಂದು--ಆಕೆಯನ್ನು ಕಳುಹಿಸಿಬಿಡು, ಯಾಕಂದರೆ ಆಕೆಯು ನಮ್ಮ ಹಿಂದೆ ಕೂಗಿಕೊಂಡು ಬರುತ್ತಾಳೆ ಎಂದು ಆತನನ್ನು ಬೇಡಿಕೊಂಡರು.

15:24b.MAT.015.024 ಆದರೆ ಆತನು ಪ್ರತ್ಯು ತ್ತರವಾಗಿ-- ತಪ್ಪಿಸಿಕೊಂಡ ಕುರಿಗಳಾಗಿರುವ ಇಸ್ರಾ ಯೇಲಿನ ಮನೆತನದವರ ಬಳಿಗೆ ಮಾತ್ರ ನಾನು ಕಳುಹಿಸಲ್ಪಟ್ಟಿದ್ದೇನೆ ಅಂದನು.

15:25b.MAT.015.025 ಆಗ ಆಕೆಯು ಬಂದು ಆತನನ್ನು ಆರಾಧಿಸಿ--ಕರ್ತನೇ, ನನಗೆ ಸಹಾಯ ಮಾಡು ಎಂದು ಕೇಳಿಕೊಂಡಳು.

15:26b.MAT.015.026 ಆದರೆ ಆತನು ಪ್ರತ್ಯುತ್ತರವಾಗಿ--ಮಕ್ಕಳ ರೊಟ್ಟಿಯನ್ನು ತಕ್ಕೊಂಡು ನಾಯಿಗಳಿಗೆ ಹಾಕುವದು ಸರಿಯಲ್ಲ ಎಂದು ಹೇಳಿ ದನು.

15:27b.MAT.015.027 ಆಗ ಆಕೆಯು--ಕರ್ತನೇ, ಅದು ನಿಜವೇ; ಆದರೂ ನಾಯಿಗಳು ತಮ್ಮ ಯಜಮಾನರ ಮೇಜಿನಿಂದ ಬೀಳುವ ರೊಟ್ಟಿ ತುಂಡುಗಳನ್ನು ತಿನ್ನು ತ್ತವಲ್ಲಾ ಅಂದಳು.

15:28b.MAT.015.028 ಆಗ ಯೇಸು ಪ್ರತ್ಯುತ್ತರವಾಗಿ ಆಕೆಗೆ--ಓ ಸ್ತ್ರೀಯೇ, ನಿನ್ನ ನಂಬಿಕೆಯು ದೊಡ್ಡದು; ನೀನು ಇಷ್ಟಪಟ್ಟಂತೆಯೇ ನಿನಗಾಗಲಿ ಎಂದು ಹೇಳಿ ದನು. ಮತ್ತು ಆಕೆಯ ಮಗಳು ಅದೇ ಗಳಿಗೆಯಲ್ಲಿ ಸ್ವಸ್ಥಳಾದಳು.

15:29b.MAT.015.029 ಇದಾದ ಮೇಲೆ ಯೇಸು ಅಲ್ಲಿಂದ ಹೊರಟು ಗಲಿಲಾಯ ಸಮುದ್ರದ ಸಮಾಪಕ್ಕೆ ಬಂದನು; ಮತು ಆತನು ಬೆಟ್ಟವನ್ನು ಹತ್ತಿ ಅಲ್ಲಿ ಕೂತುಕೊಂಡನು.

15:30b.MAT.015.030 ಆಗ ಜನರ ದೊಡ್ಡ ಸಮೂಹಗಳು ಕುಂಟರನ್ನು ಕುರುಡರನ್ನು ಮೂಕರನ್ನು ಊನವಾದವರನ್ನು ಮತ್ತು ಬೇರೆ ಅನೇಕರನ್ನು ತಮ್ಮೊಂದಿಗೆ ಕರಕೊಂಡು ಯೇಸು ವಿನ ಪಾದಗಳ ಬಳಿಗೆ ತಂದರು. ಮತ್ತು ಆತನು ಅವರನ್ನು ಸ್ವಸ್ಥಪಡಿಸಿದನು.

15:31b.MAT.015.031 ಮೂಕರು ಮಾತನಾಡು ವದನ್ನೂ ಊನವಾದವರು ಸ್ವಸ್ಥರಾಗಿರುವದನ್ನೂ ಕುಂಟರು ನಡೆದಾಡುವದನ್ನೂ ಕುರುಡರು ನೋಡುವ ದನ್ನೂ ಜನಸಮೂಹದವರು ಕಂಡು ಆಶ್ಚರ್ಯದಿಂದ ಇಸ್ರಾಯೇಲಿನ ದೇವರನ್ನು ಮಹಿಮೆಪಡಿಸಿದರು.

15:32b.MAT.015.032 ತರುವಾಯ ಯೇಸು ತನ್ನ ಶಿಷ್ಯರನ್ನು ಕರೆದು-- ನಾನು ಈ ಜನಸಮೂಹವನ್ನು ಕನಿಕರಿಸುತ್ತೇನೆ; ಯಾಕ ಂದರೆ ಈಗ ಬಿಟ್ಟೂಬಿಡದೆ ಮೂರು ದಿನಗಳಿಂದ ಅವರು ನನ್ನೊಂದಿಗಿದ್ದಾರೆ; ಮತ್ತು ಅವರಿಗೆ ತಿನ್ನುವದಕ್ಕೆ ಏನೂ ಇಲ್ಲ; ದಾರಿಯಲ್ಲಿ ಅವರು ಬಳಲಿಹೋದಾರೆಂದು ಅವ ರನ್ನು ಉಪವಾಸವಾಗಿ ಕಳುಹಿಸು

15:33b.MAT.015.033 ಅದಕ್ಕೆ ಆತನ ಶಿಷ್ಯರು ಆತನಿಗೆ--ಇಂಥಾ ದೊಡ್ಡ ಸಮೂಹವನ್ನು ತೃಪ್ತಿಪಡಿಸುವಂತೆ ಈ ಅರಣ್ಯದಲ್ಲಿ ನಮಗೆ ಎಲ್ಲಿಂದ ರೊಟ್ಟಿಯು ಸಿಕ್ಕೀತು ಅಂದರು.

15:34b.MAT.015.034 ಆಗ ಯೇಸು ಅವರಿಗೆ--ನಿಮ್ಮ ಹತ್ತಿರ ಎಷ್ಟು ರೊಟ್ಟಿಗಳಿವೆ ಎಂದು ಕೇಳಿದನು. ಅವರು--ಏಳು ರೊಟ್ಟಿಗಳು ಮತ್ತು ಕೆಲವು ಚಿಕ್ಕ ಮಾನುಗಳಿವೆ ಅಂದರು.

15:35b.MAT.015.035 ಆಗ ಜನಸಮೂಹವು ನೆಲದ ಮೇಲೆ ಕೂತುಕೊಳ್ಳ ಬೇಕೆಂದು ಆತನು ಅಪ್ಪಣೆಕೊಟ್ಟನು.

15:36b.MAT.015.036 ಆತನು ಆ ಏಳು ರೊಟ್ಟಿಗಳನ್ನು ಮತ್ತು ಮಾನುಗಳನ್ನು ತಕ್ಕೊಂಡು ಸ್ತೋತ್ರಮಾಡಿ ಅವುಗಳನ್ನು ಮುರಿದು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು.

15:37b.MAT.015.037 ಅವರೆಲ್ಲರೂ ಊಟಮಾಡಿ ತೃಪ್ತರಾದರು; ಮತ್ತು ಅವರು ಮಿಕ್ಕ ತುಂಡುಗಳನ್ನು ಕೂಡಿಸಲಾಗಿ ಏಳು ಪುಟ್ಟಿಗಳು ತುಂಬಿದವು.

15:38b.MAT.015.038 ಊಟಮಾಡಿದವರು ಸ್ತ್ರೀಯರೂ ಮಕ್ಕಳೂ ಅಲ್ಲದೆ ನಾಲ್ಕು ಸಾವಿರ ಗಂಡಸರು.ತರುವಾಯ ಆತನು ಜನಸಮೂಹವನ್ನು ಕಳುಹಿಸಿಬಿಟ್ಟು ದೋಣಿಯನ್ನು ಹತ್ತಿ ಮಗ್ದಲ ತೀರಕ್ಕೆ ಬಂದನು.

15:39b.MAT.015.039 ತರುವಾಯ ಆತನು ಜನಸಮೂಹವನ್ನು ಕಳುಹಿಸಿಬಿಟ್ಟು ದೋಣಿಯನ್ನು ಹತ್ತಿ ಮಗ್ದಲ ತೀರಕ್ಕೆ ಬಂದನು.

16

16:1b.MAT.016.001 ಸದ್ದುಕಾಯರೊಂದಿಗೆ ಫರಿಸಾಯರು ಸಹ ಬಂದು ಆತನನ್ನು ಶೋಧಿಸುವದಕ್ಕಾಗಿ ಆಕಾಶದಲ್ಲಿ ತಮಗೆ ಒಂದು ಸೂಚಕಕಾರ್ಯವನ್ನು ತೋರಿಸಬೇಕೆಂದು ಅಪೇಕ್ಷಿಸಿದರು.

16:2b.MAT.016.002 ಆತನು ಪ್ರತ್ಯು ತ್ತರವಾಗಿ ಅವರಿಗೆ--ಸಾಯಂಕಾಲವಾದಾಗ ಆಕಾಶವು ಕೆಂಪಾಗಿದ್ದರೆ ಒಳ್ಳೆಯ ಹವಾಮಾನ ಇರುವದೆಂದೂ

16:3b.MAT.016.003 ಬೆಳಿಗ್ಗೆ ಆಕಾಶವು ಮೋಡಕವಿದು ಕೆಂಪಾಗಿದ್ದರೆ--ಈ ಹೊತ್ತು ಕೆಟ್ಟ ಹವಾಮಾನ ಇದೆಯೆಂದೂ ನೀವು ಅನ್ನುತ್ತೀರಿ. ಓ ಕಪಟಿಗಳೇ, ಆಕಾಶದಲ್ಲಾಗುವ ಸೂಚನೆ ಗಳನ್ನು ನೀವು ಗ್ರಹಿಸಬಲ್ಲಿರಿ; ಆದರೆ ಸಮಯಗಳ ಸೂಚನೆಗಳನ್ನು ನೀವು ಗ್ರಹಿಸಲಾರಿರಾ?

16:4b.MAT.016.004 ವ್ಯಭಿಚಾರಿ ಯಾದ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ; ಆದರೆ ಪ್ರವಾದಿಯಾದ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಕೊಡಲ್ಪಡುವದಿಲ್ಲ ಎಂದು ಹೇಳಿದನು. ತರುವಾಯ ಆತನು ಅವರನ್ನು ಬಿಟ್ಟು ಹೊರಟುಹೋದನು.

16:5b.MAT.016.005 ಆತನ ಶಿಷ್ಯರು ರೊಟ್ಟಿ ತಕ್ಕೊಳ್ಳುವದನ್ನು ಮರೆತು ಆಚೇದಡಕ್ಕೆ ಬಂದಿದ್ದರು.

16:6b.MAT.016.006 ಆಗ ಯೇಸು ಅವರಿಗೆ--ಫರಿಸಾಯರ ಮತ್ತು ಸದ್ದುಕಾಯರ ಹುಳಿಯ ವಿಷಯದಲ್ಲಿ ಎಚ್ಚರಿಕೆಯಿಂದ ಜಾಗರೂಕ ರಾಗಿರ್ರಿ ಎಂದು ಹೇಳಿದನು.

16:7b.MAT.016.007 ಅದಕ್ಕೆ ಅವರು ತಮ್ಮ ತಮ್ಮಲ್ಲಿಯೇ--ನಾವು ರೊಟ್ಟಿಯನ್ನು ತಕ್ಕೊಳ್ಳದೆ ಇರುವ ದರಿಂದ (ಹೀಗೆ ಹೇಳುತ್ತಾನೆ) ಎಂದು ಅಂದು ಕೊಂಡರು.

16:8b.MAT.016.008 ಯೇಸು ಅದನ್ನು ತಿಳುಕೊಂಡವನಾಗಿ ಅವರಿಗೆ--ಓ ಅಲ್ಪ ವಿಶ್ವಾಸಿಗಳೇ, ನೀವು ರೊಟ್ಟಿಯನ್ನು ತಕ್ಕೊಂಡು ಬರಲಿಲ್ಲವೆಂದು ನಿಮ್ಮಲ್ಲಿ ಯಾಕೆ ಅಂದುಕೊಳ್ಳುತ್ತೀರಿ?

16:9b.MAT.016.009 ಐದು ರೊಟ್ಟಿಗಳನ್ನು ಐದು ಸಾವಿರ ಜನರಿಗೆ ಹಂಚಿದಾಗ ಎಷ್ಟು ಪುಟ್ಟಿಗಳನ್ನು ತುಂಬಿದಿರೆಂದು ನೀವು ಇನ್ನೂ ಗ್ರಹಿಸಲಿಲ್ಲವೋ? ಇಲ್ಲವೆ ನಿಮಗೆ ನೆನಪಿಲ್ಲವೋ?

16:10b.MAT.016.010 ಇದಲ್ಲದೆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರಿಗೆ ಹಂಚಿದಾಗ ಎಷ್ಟು ಪುಟ್ಟಿಗಳನ್ನು ತುಂಬಿದಿರಿ?

16:11b.MAT.016.011 ನಾನು ರೊಟ್ಟಿಯ ವಿಷಯದಲ್ಲಿ ಅಲ್ಲ, ಫರಿಸಾಯರ ಮತ್ತು ಸದ್ದುಕಾಯರ ಹುಳಿಯ ವಿಷಯದಲ್ಲಿ ಎಚ್ಚರವಾಗಿರಬೇಕೆಂದು ಹೇಳಿದ್ದನ್ನು ನೀವು ಗ್ರಹಿಸದೆ ಇರುವದು ಹೇಗೆ ಎಂದು ಹೇಳಿದನು.

16:12b.MAT.016.012 ಆಗ ಅವರು ರೊಟ್ಟೀ ಹುಳಿಯ ವಿಷಯದಲ್ಲಿ ಅಲ್ಲ, ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯ ವಿಷಯದಲ್ಲಿ ತಾವು ಎಚ್ಚರವಾಗಿರಬೇಕೆಂದು ಆತನು ಹೇಳಿದನು ಎಂದು ಅವರು ಗ್ರಹಿಸಿಕೊಂಡರು.

16:13b.MAT.016.013 ಯೇಸು ಕೈಸರೈಯ ಫಿಲಿಪ್ಪಿ ಪ್ರಾಂತ್ಯಗಳಿಗೆ ಬಂದಾಗ ಆತನು ತನ್ನ ಶಿಷ್ಯರಿಗೆ--ಮನುಷ್ಯಕುಮಾರ ನಾಗಿರುವ ನನ್ನನ್ನು ಜನರು ಯಾರೆಂದು ಹೇಳುತ್ತಾರೆ ಎಂದು ಕೇಳಿದನು.

16:14b.MAT.016.014 ಆಗ ಅವರು-- ನಿನ್ನನ್ನು ಕೆಲ ವರು ಬಾಪ್ತಿಸ್ಮ ಮಾಡಿಸುವ ಯೋಹಾನನು, ಕೆಲ ವರು--ಎಲೀಯನು, ಮತ್ತು ಬೇರೆಯವರು--ಯೆರೆವಿಾಯನು ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು ಎಂದು ಹೇಳುತ್ತಾರೆ ಅಂದರು.

16:15b.MAT.016.015 ಆತನು ಅವರಿಗೆ--ಆದರೆ ನೀವು ನನ್ನನ್ನು ಯಾರನ್ನುತ್ತೀರಿ ಎಂದು ಕೇಳಿ ದನು.

16:16b.MAT.016.016 ಅದಕ್ಕೆ ಸೀಮೋನ ಪೇತ್ರನು ಪ್ರತ್ಯುತ್ತರ ವಾಗಿ--ನೀನು ಕ್ರಿಸ್ತನು, ಜೀವವುಳ್ಳ ದೇವರಕುಮಾರನು ಎಂದು ಹೇಳಿದನು.

16:17b.MAT.016.017 ಆಗ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಯಾಕಂದರೆ ರಕ್ತಮಾಂಸವಲ್ಲ (ಮನುಷ್ಯರಲ್ಲ), ಪರಲೋಕದಲ್ಲಿರುವ ನನ್ನ ತಂದೆಯೇ ಅದನ್ನು ನಿನಗೆ ಪ್ರಕಟಿಸಿದನು ಎಂದು ಹೇಳಿದನು.

16:18b.MAT.016.018 ನಾನು ಸಹ ನಿನಗೆ ಹೇಳುವದೇ ನಂದರೆ--ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು; ನರಕದ ದ್ವಾರಗಳು ಅದನ್ನು ಜಯಿಸಲಾರವು.

16:19b.MAT.016.019 ನಾನು ನಿನಗೆ ಪರಲೋಕ ರಾಜ್ಯದ ಬೀಗದ ಕೈಗಳನ್ನು ಕೊಡುತ್ತೇನೆ; ನೀನು ಯಾವದನ್ನು ಭೂಮಿಯ ಮೇಲೆ ಕಟ್ಟುತ್ತೀಯೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡುವದು; ನೀನು ಯಾವ ದನ್ನು ಭೂಮಿಯ ಮೇಲೆ ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಡುವದು ಅಂದನು.

16:20b.MAT.016.020 ತರುವಾಯ ತಾನು ಕ್ರಿಸ್ತನಾಗಿರುವ ಯೇಸು ಎಂದು ಯಾರಿಗೂ ಹೇಳಬಾರದು ಎಂಬದಾಗಿ ತನ್ನ ಶಿಷ್ಯರಿಗೆ ಆಜ್ಞಾಪಿಸಿದನು.

16:21b.MAT.016.021 ತಾನು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಶ್ರಮೆಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಎದ್ದು ಬರುವದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತನ್ನ ಶಿಷ್ಯರಿಗೆ ತಿಳಿಸಲಾರಂಭಿಸಿದನು.

16:22b.MAT.016.022 ತರುವಾಯ ಪೇತ್ರನು ಆತನ ಕೈಹಿಡಿದು--ಕರ್ತನೇ, ಅದು ನಿನ್ನಿಂದ ದೂರವಿರಲಿ; ಇಂಥದ್ದು ನಿನಗೆ ಆಗಬಾರದು ಎಂದು ಹೇಳಿ ಆತನನ್ನು ಗದರಿಸಲಾರಂಭಿಸಿದನು.

16:23b.MAT.016.023 ಆದರೆ ಆತನು ತಿರುಗಿಕೊಂಡು ಪೇತ್ರನಿಗೆ--ಸೈತಾನನೇ, ನನ್ನ ಹಿಂದೆ ಹೋಗು; ನೀನು ನನಗೆ ಅಭ್ಯಂತರವಾಗಿದ್ದೀ; ನೀನು ದೇವರವುಗಳನ್ನಲ್ಲ,ಮನುಷ್ಯರ ಆಲೋಚನೆಗಳನ್ನೇ ಮಾಡುತ್ತೀ ಅಂದನು.

16:24b.MAT.016.024 ತರುವಾಯ ಯೇಸು ತನ್ನ ಶಿಷ್ಯರಿಗೆ--ಯಾವ ನಾದರೂ ನನ್ನ ಹಿಂದೆ ಬರುವದಕ್ಕೆ ಅಪೇಕ್ಷಿಸಿದರೆ ಅವನು ತನ್ನನ್ನು ತಾನೇ ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.

16:25b.MAT.016.025 ಯಾಕಂದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುವವನು ಅದನ್ನು ಕಳ ಕೊಳ್ಳುವನು; ಮತ್ತು ನನ್ನ ನಿಮಿತ್ತವಾಗಿ ತನ್ನ ಪ್ರಾಣ ವನ್ನು ಕಳಕೊಳ್ಳುವವನು ಅದನ್ನು ಕಂಡುಕೊಳ್ಳುವನು.

16:26b.MAT.016.026 ಒಬ್ಬ ಮನುಷ್ಯನು ಇಡೀ ಲೋಕವನ್ನು ಸಂಪಾದಿಸಿ ಕೊಂಡು ತನ್ನ ಆತ್ಮವನ್ನು ನಷ್ಟಪಡಿಸಿ ಕೊಂಡರೆ ಅವನಿಗೆ ಲಾಭವೇನು? ಇಲ್ಲವೆ ತನ್ನ ಆತ್ಮಕ್ಕೆ ಬದಲಾಗಿ ಒಬ್ಬ ಮನುಷ್ಯನು ಏನು ಕೊಟ್ಟಾನು?

16:27b.MAT.016.027 ಯಾಕಂದರೆ ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯಲ್ಲಿ ತನ್ನ ದೂತರೊಡನೆ ಬಂದಾಗ ಆತನು ಪ್ರತಿಯೊಬ್ಬ ನಿಗೂ ಅವನವನ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವನು ಎಂದು ಹೇಳಿದನು.ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.

16:28b.MAT.016.028 ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.

17

17:1b.MAT.017.001 ಆರು ದಿನಗಳಾದ ಮೇಲೆ ಯೇಸು ಪೇತ್ರನನ್ನೂ ಯಾಕೋಬನನ್ನೂ ಅವನ ಸಹೋದರನಾದ ಯೋಹಾನನನ್ನೂ ವಿಂಗಡವಾಗಿ ಕರಕೊಂಡು ಎತ್ತರವಾದ ಒಂದು ಬೆಟ್ಟಕ್ಕೆ ಹೋದನು.

17:2b.MAT.017.002 ಅಲ್ಲಿ ಆತನು ಅವರ ಮುಂದೆ ರೂಪಾಂತರ ಗೊಂಡನು. ಆತನ ಮುಖವು ಸೂರ್ಯನಂತೆ ಪ್ರಕಾಶಿಸಿತು; ಮತ್ತು ಆತನ ಉಡುಪು ಬೆಳಕಿನಂತೆ ಬೆಳ್ಳಗಿತ್ತು.

17:3b.MAT.017.003 ಇಗೋ, ಮೋಶೆಯೂ ಎಲೀಯನೂ ಅವರಿಗೆ ಕಾಣಿಸಿಕೊಂಡು ಆತನ ಕೂಡ ಮಾತನಾಡು ತ್ತಿದ್ದರು.

17:4b.MAT.017.004 ಆಗ ಪೇತ್ರನು ಯೇಸುವಿಗೆ--ಕರ್ತನೇ, ಇಲ್ಲಿಯೇ ಇರುವದು ನಮಗೆ ಒಳ್ಳೇದು. ನಿನಗೆ ಮನಸ್ಸಿದ್ದರೆ ನಾವು ನಿನಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು ಇಲ್ಲಿ ಮೂರು ಗುಡಾರಗಳನ್ನು ಕಟ್ಟುವೆವು ಎಂದು ಹೇಳಿದನು.

17:5b.MAT.017.005 ಅವನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿದುಕೊಂಡಿತು; ಆಗ ಇಗೋ--ನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ಈತನೇ; ಈತನ ಮಾತನ್ನು ನೀವು ಕೇಳಿರಿ ಎಂದು ಹೇಳುವ ಧ್ವನಿಯು ಮೇಘದೊಳಗಿಂದ ಉಂಟಾಯಿತು.

17:6b.MAT.017.006 ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲು ಬಿದ್ದರು.

17:7b.MAT.017.007 ಆಗ ಯೇಸು ಬಂದು ಅವರನ್ನು ಮುಟ್ಟಿ--ಏಳಿರಿ, ಹೆದರಬೇಡಿರಿ ಎಂದು ಹೇಳಿದನು.

17:8b.MAT.017.008 ಅವರು ತಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿದಾಗ ಯೇಸುವನ್ನೇ ಹೊರತು ಮತ್ತಾರನ್ನೂ ನೋಡಲಿಲ್ಲ.

17:9b.MAT.017.009 ಅವರು ಬೆಟ್ಟದಿಂದ ಇಳಿದು ಬರುತ್ತಿದ್ದಾಗ ಯೇಸು ಅವರಿಗೆ--ಮನುಷ್ಯಕುಮಾರನು ಸತ್ತವರೊಳಗಿಂದ ಎದ್ದು ಬರುವವರೆಗೆ ಈ ದರ್ಶನವನ್ನು ಯಾರಿಗೂ ಹೇಳಬಾರದೆಂದು ಅವರಿಗೆ ಆಜ್ಞಾಪಿಸಿದನು.

17:10b.MAT.017.010 ಆಗ ಆತನ ಶಿಷ್ಯರು ಆತನಿಗೆ--ಎಲೀಯನು ಮೊದಲು ಬರುವದು ಅಗತ್ಯವೆಂದು ಶಾಸ್ತ್ರಿಗಳು ಯಾಕೆ ಹೇಳುತ್ತಾರೆ ಎಂದು ಕೇಳಿದರು.

17:11b.MAT.017.011 ಯೇಸು ಪ್ರತ್ಯುತ್ತರವಾಗಿ ಅವ ರಿಗೆ -- ಎಲೀಯನು ಮೊದಲು ಬಂದು ಎಲ್ಲವುಗಳನ್ನು ತಿರಿಗಿ ಯಥಾಸ್ಥಾನ ಪಡಿಸುವದು ನಿಜವೇ;

17:12b.MAT.017.012 ಆದರೆ ಎಲೀಯನು ಆಗಲೇ ಬಂದನು. ಮತ್ತು ಅವರು ಅವನನ್ನು ಅರಿಯದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದ್ದಾಯಿತು. ಅದರಂತೆಯೇ ಮನುಷ್ಯಕುಮಾರ ನು ಸಹ ಅವರಿಂದ ಶ್ರಮೆಯನ್ನು ಅನುಭವಿಸುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.

17:13b.MAT.017.013 ಬಾಪ್ತಿಸ್ಮ ಮಾಡಿಸುವ ಯೋಹಾನನ ವಿಷಯದಲ್ಲಿ ಆತನು ತಮ್ಮೊಂದಿಗೆ ಮಾತನಾಡಿದನೆಂದು ಶಿಷ್ಯರು ಆಗ ಗ್ರಹಿಸಿಕೊಂಡರು.

17:14b.MAT.017.014 ಅವರು ಜನಸಮೂಹದ ಬಳಿಗೆ ಬಂದಾಗ ಒಬ್ಬ ಮನುಷ್ಯನು ಆತನ ಬಳಿಗೆ ಬಂದು ಮೊಣ ಕಾಲೂರಿ--

17:15b.MAT.017.015 ಕರ್ತನೇ, ನನ್ನ ಮಗನ ಮೇಲೆ ಕರುಣೆಯಿಡು; ಯಾಕಂದರೆ ಅವನು ಚಂದ್ರರೋಗ ದಿಂದ ಬಹಳವಾಗಿ ಕಷ್ಟಪಡುತ್ತಾನೆ, ಅನೇಕಸಾರಿ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಬೀಳುತ್ತಾನೆ.

17:16b.MAT.017.016 ನಾನು ಅವನನ್ನು ನಿನ್ನ ಶಿಷ್ಯರ ಬಳಿಗೆ ಕರೆತಂದೆನು; ಅವರು ಅವನನ್ನು ಸ್ವಸ್ಥಮಾಡಲಾರದೆ ಹೋದರು ಎಂದು ಹೇಳಿದನು.

17:17b.MAT.017.017 ಆಗ ಯೇಸು ಪ್ರತ್ಯುತ್ತರ ವಾಗಿ--ನಂಬಿಕೆಯಿಲ್ಲದ ಓ ಮೂರ್ಖ ಸಂತತಿಯೇ, ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು.

17:18b.MAT.017.018 ಆಗ ಯೇಸು ದೆವ್ವವನ್ನು ಗದರಿಸಲಾಗಿ ಅದು ಅವನೊಳಗಿಂದ ಹೊರಟುಹೋಯಿತು; ಆಗ ಹುಡುಗನು ಆ ಗಳಿಗೆಯಲ್ಲಿಯೇ ಸ್ವಸ್ಥನಾದನು.

17:19b.MAT.017.019 ತರುವಾಯ ಶಿಷ್ಯರು ವಿಂಗಡವಾಗಿ ಯೇಸುವಿನ ಬಳಿಗೆ ಬಂದು--ಅದನ್ನು ಬಿಡಿಸುವದಕ್ಕೆ ನಮಗೆ ಯಾಕೆ ಆಗಲಿಲ್ಲ ಎಂದು ಕೇಳಿದರು.

17:20b.MAT.017.020 ಯೇಸು ಅವರಿಗೆ--ನಿಮ್ಮ ಅಪನಂಬಿಕೆಯ ದೆಸೆಯಿಂದಲೇ; ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಸಾಸಿವೆ ಕಾಳಷ್ಟು ನಂಬಿಕೆ ನಿಮಗಿರುವದಾದರೆ ನೀವು ಈ ಬೆಟ್ಟಕ್ಕೆ--ಇಲ್ಲಿಂದ ಆ ಸ್ಥಳಕ್ಕೆ ಹೋಗು ಎಂದು ಹೇಳಿದರೆ ಅದು ಹೋಗುವದು; ಮತ್ತು ಯಾವದೂ ನಿಮಗೆ ಅಸಾಧ್ಯವಾಗಿರುವದಿಲ್ಲ.

17:21b.MAT.017.021 ಪ್ರಾರ್ಥನೆ ಉಪವಾಸಗಳಿಂದಲ್ಲದೆ ಈ ತರವಾದದ್ದು ಹೊರಟು ಹೋಗುವದಿಲ್ಲ ಅಂದನು.

17:22b.MAT.017.022 ಅವರು ಗಲಿಲಾಯಲ್ಲಿ ಇನ್ನೂ ವಾಸವಾಗಿದ್ದಾಗ ಯೇಸು ಅವರಿಗೆ--ಮನುಷ್ಯಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುವನು.

17:23b.MAT.017.023 ಅವರು ಆತನನ್ನು ಕೊಲ್ಲುವರು; ಇದಲ್ಲದೆ ಮೂರನೇ ದಿನದಲ್ಲಿ ಆತನು ತಿರಿಗಿ ಎಬ್ಬಿಸಲ್ಪಡುವನು ಎಂದು ಹೇಳಿದನು. ಅದಕ್ಕೆ ಅವರು ಬಹಳ ದುಃಖಪಟ್ಟರು.

17:24b.MAT.017.024 ತರುವಾಯ ಅವರು ಕಪೆರ್ನೌಮಿಗೆ ಬಂದಾಗ ತೆರಿಗೆ ಹಣವನ್ನು ವಸೂಲಿಮಾಡುವವರು ಪೇತ್ರನ ಬಳಿಗೆ ಬಂದು--ನಿಮ್ಮ ಬೋಧಕನು ತೆರಿಗೆಯನ್ನು ಸಲ್ಲಿಸುವದಿಲ್ಲವೋ ಎಂದು ಕೇಳಿದರು. ಅದಕ್ಕೆ ಅವನು--ಸಲ್ಲಿಸುವನು ಅಂದನು.

17:25b.MAT.017.025 ಅವನು ಮನೆ ಯೊಳಕ್ಕೆ ಬಂದಾಗ ಯೇಸು ಮುಂದಾಗಿ ಅವನಿಗೆ--ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋ ಕದ ರಾಜರು ಯಾರಿಂದ ಕಪ್ಪವನ್ನು ಇಲ್ಲವೆ ತೆರಿಗೆ ಯನ್ನು ತಕ್ಕೊಳ್ಳುತ್ತಾರೆ? ತಮ್ಮ ಮಕ್ಕಳಿಂದಲೋ ಇಲ್ಲವೆ ಅನ್ಯರಿಂದಲೋ ಎಂದು ಕೇಳಿದನು.

17:26b.MAT.017.026 ಪೇತ್ರನು ಆತನಿಗೆ-- ಅನ್ಯರಿಂದ ಎಂದು ಹೇಳಲಾಗಿ ಆತನು ಅವನಿಗೆ--ಹಾಗಾದರೆ ಮಕ್ಕಳು ಸ್ವತಂತ್ರರೇ.ಹೀಗಿದ್ದರೂ ನಾವು ಅವರನ್ನು ಅಭ್ಯಂತರಪಡಿಸದಂತೆ ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕು; ಆಗ ಮೊದಲು ಬರುವ ಮಾನನ್ನು ಹಿಡಿದು ಅದರ ಬಾಯನ್ನು ತೆರೆದರೆ ಅದರಲ್ಲಿ ಒಂದು ನಾಣ್ಯವನ್ನು ಕಾಣುವಿ; ಅದನ್ನು ತಕ್ಕೊಂಡು ನನ್ನದೂ ನಿನ್ನದೂ ಎಂದು ಹೇಳಿ ಅವರಿಗೆ ಕೊಡು ಎಂದು ಹೇಳಿದ

17:27b.MAT.017.027 ಹೀಗಿದ್ದರೂ ನಾವು ಅವರನ್ನು ಅಭ್ಯಂತರಪಡಿಸದಂತೆ ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕು; ಆಗ ಮೊದಲು ಬರುವ ಮಾನನ್ನು ಹಿಡಿದು ಅದರ ಬಾಯನ್ನು ತೆರೆದರೆ ಅದರಲ್ಲಿ ಒಂದು ನಾಣ್ಯವನ್ನು ಕಾಣುವಿ; ಅದನ್ನು ತಕ್ಕೊಂಡು ನನ್ನದೂ ನಿನ್ನದೂ ಎಂದು ಹೇಳಿ ಅವರಿಗೆ ಕೊಡು ಎಂದು ಹೇಳಿದ

18

18:1b.MAT.018.001 ಅದೇ ಸಮಯದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು--ಪರಲೋಕ ರಾಜ್ಯದಲ್ಲಿ ಅತಿ ದೊಡ್ಡವನು ಯಾರು ಎಂದು ಕೇಳಿದರು.

18:2b.MAT.018.002 ಆಗ ಯೇಸು ಒಂದು ಚಿಕ್ಕ ಮಗುವನ್ನು ತನ್ನ ಬಳಿಗೆ ಕರೆದು ಅವನನ್ನು ಅವರ ಮಧ್ಯದಲ್ಲಿ ನಿಲ್ಲಿಸಿ--

18:3b.MAT.018.003 ನೀವು ತಿರುಗಿ ಕೊಂಡು ಚಿಕ್ಕ ಮಕ್ಕಳಂತೆ ಆಗದೆಹೋದರೆ ಪರಲೋಕ ರಾಜ್ಯದೊಳಗೆ ಪ್ರವೇಶಿಸುವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.

18:4b.MAT.018.004 ಆದದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಾನು ತಗ್ಗಿಸಿಕೊಳ್ಳುವನೋ ಅವನೇ ಪರಲೋಕರಾಜ್ಯದಲ್ಲಿ ಅತಿ ದೊಡ್ಡವನಾಗಿರುವನು.

18:5b.MAT.018.005 ಮತ್ತು ಯಾವನಾದರೂ ಇಂಥ ಚಿಕ್ಕ ಮಗುವನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿ ಕೊಂಡರೆ ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ.

18:6b.MAT.018.006 ಆದರೆ ನನ್ನಲ್ಲಿ ವಿಶ್ವಾಸವಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವ ನಾದರೂ ಅಭ್ಯಂತರವಾದರೆ ಅವನ ಕೊರಳಿಗೆ ಬೀಸುವ ಕಲ್ಲನ್ನು ನೇತು ಹಾಕಿ ಅವನನ್ನು ಸಮುದ್ರದ ಆಳದಲ್ಲಿ ಮುಳುಗಿಸಿಬಿಡುವದು ಅವನಿಗೆ ಒಳ್ಳೇದು.

18:7b.MAT.018.007 ತೊಡಕುಗಳ ನಿಮಿತ್ತವಾಗಿ ಲೋಕಕ್ಕೆ ಅಯ್ಯೋ! ಯಾಕಂದರೆ ತೊಡಕುಗಳು ಬಂದೇ ಬರುವವು; ಆದರೆ ಯಾವ ಮನುಷ್ಯನಿಂದ ತೊಡಕು ಬರುವದೋ ಅವನಿಗೆ ಅಯ್ಯೋ!

18:8b.MAT.018.008 ಆದದರಿಂದ ನಿನ್ನ ಕೈಯಾಗಲೀ ಕಾಲಾಗಲೀ ನಿನ್ನನ್ನು ಅಭ್ಯಂತರಪಡಿಸಿದರೆ ಅವುಗಳನ್ನು ಕಡಿದು ನಿನ್ನಿಂದ ಬಿಸಾಡಿಬಿಡು; ನೀನು ಎರಡು ಕೈಯುಳ್ಳವನಾಗಿ ಇಲ್ಲವೆ ಎರಡು ಕಾಲುಳ್ಳವನಾಗಿ ನಿತ್ಯವಾದ ಬೆಂಕಿಗೆ ಹಾಕಲ್ಪಡುವದಕ್ಕಿಂತ ಕುಂಟ ನಾಗಿ ಇಲ್ಲವೆ ಊನನಾಗಿ ಜೀವದಲ್ಲಿ ಪ್ರವೇಶಿಸುವದು ನಿನಗೆ ಒಳ್ಳೇದು.

18:9b.MAT.018.009 ನಿನ್ನ ಕಣ್ಣು ನಿನ್ನನ್ನು ಅಭ್ಯಂತರ ಪಡಿಸಿದರೆ ಅದನ್ನು ಕಿತ್ತು ನಿನ್ನಿಂದ ಬಿಸಾಡಿಬಿಡು; ನೀನು ಎರಡು ಕಣ್ಣುಳ್ಳವನಾಗಿ ನರಕದ ಬೆಂಕಿಯಲ್ಲಿ ಹಾಕಲ್ಪಡುವದಕ್ಕಿಂತ ಒಂದು ಕಣ್ಣುಳ್ಳವನಾಗಿ ಜೀವದಲ್ಲಿ ಪ್ರವೇಶಿಸುವದು ನಿನಗೆ ಒಳ್ಳೇದು.

18:10b.MAT.018.010 ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ತಾತ್ಸಾರ ಮಾಡದಂತೆ ನೋಡಿಕೊಳ್ಳಿರಿ; ಯಾಕಂದರೆ ನಾನು ನಿಮಗೆ ಹೇಳುವದೇನಂದರೆ--ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಾರೆ.

18:11b.MAT.018.011 ಯಾಕಂದರೆ ಮನುಷ್ಯಕುಮಾರನು ಕಳೆದುಹೋದ ದ್ದನ್ನು ರಕ್ಷಿಸುವದಕ್ಕಾಗಿ ಬಂದನು.

18:12b.MAT.018.012 ನೀವು ಹೇಗೆ ಯೋಚಿಸುತ್ತೀರಿ? ಒಬ್ಬ ಮನುಷ್ಯ ನಿಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದು ತಪ್ಪಿಸಿಕೊಂಡು ಹೋದರೆ ಅವನು ತೊಂಭತ್ತೊಂಭತ್ತನ್ನು ಬಿಟ್ಟು ಬೆಟ್ಟಗಳಿಗೆ ಹೊರಟುಹೋಗಿ ತಪ್ಪಿಸಿಕೊಂಡ ದ್ದನ್ನು ಹುಡುಕುವದಿಲ್ಲವೇ?

18:13b.MAT.018.013 ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವನು ಅದನ್ನು ಕಂಡುಕೊಂಡರೆ ತಪ್ಪಿಸಿಕೊಳ್ಳದೆ ಇದ್ದ ತೊಂಭತ್ತೊಂಭತ್ತು ಕುರಿಗಳಿಗಿಂತ ಆದರ ವಿಷಯದಲ್ಲಿ ಹೆಚ್ಚು ಸಂತೋಷ ಪಡುತ್ತಾನೆ.

18:14b.MAT.018.014 ಅದರಂತೆಯೇ ಈ ಚಿಕ್ಕವರಲ್ಲಿ ಒಬ್ಬನಾದರೂ ನಾಶವಾಗುವದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ.

18:15b.MAT.018.015 ಇದಲ್ಲದೆ ನಿನ್ನ ಸಹೋದರನು ನಿನಗೆ ವಿರೋಧ ವಾಗಿ ತಪ್ಪು ಮಾಡಿದರೆ ನೀನೂ ಅವನೂ ಮಾತ್ರ ಇರುವಾಗ ಅವನ ತಪ್ಪನ್ನು ಅವನಿಗೆ ತಿಳಿಸು; ಅವನು ನಿನ್ನ ಮಾತನ್ನು ಕೇಳಿದರೆ ನೀನು ನಿನ್ನ ಸಹೋದರನನ್ನು ಸಂಪಾದಿಸಿಕೊಂಡಿರುವಿ.

18:16b.MAT.018.016 ಆದರೆ ಅವನು ನಿನ್ನ ಮಾತನ್ನು ಕೇಳದೆಹೋದರೆ ನಿನ್ನೊಂದಿಗೆ ಒಬ್ಬನನ್ನು ಅಥವಾ ಇಬ್ಬರನ್ನು ಕರಕೊಂಡು ಹೋಗು; ಹೀಗೆ ಇಬ್ಬರ ಇಲ್ಲವೆ ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಸ್ಥಾಪಿಸಲ್ಪಡುವದು.

18:17b.MAT.018.017 ಅವನು ಅವರ ಮಾತುಗಳನ್ನೂ ಕೇಳುವದಕ್ಕೆ ಅಲಕ್ಷ್ಯಮಾಡಿದರೆ ಅದನ್ನು ಸಭೆಗೆ ತಿಳಿಸು. ಆದರೆ ಅವನು ಸಭೆಯ ಮಾತನ್ನೂ ಅಲಕ್ಷ್ಯಮಾಡಿದರೆ ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ.

18:18b.MAT.018.018 ನಾನು ನಿಮಗೆ ನಿಜವಾಗಿ ಹೇಳುವದೇನಂ ದರೆ--ನೀವು ಭೂಮಿಯ ಮೇಲೆ ಯಾವದನ್ನು ಕಟ್ಟುತ್ತೀರೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡು ವದು. ಮತ್ತು ನೀವು ಭೂಮಿಯ ಮೇಲೆ ಯಾವದನ್ನು ಬಿಚ್ಚುತ್ತೀರೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪ ಡುವದು.

18:19b.MAT.018.019 ನಾನು ನಿಮಗೆ ತಿರಿಗಿ ಹೇಳುವದೇನಂದರೆ --ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವ ವಿಷಯಕ್ಕಾದರೂ ಭೂಮಿಯ ಮೇಲೆ ಸಮ್ಮತಿಸಿದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವದು.

18:20b.MAT.018.020 ಯಾಕಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿಬರುತ್ತಾರೋ ಅವರ ಮಧ್ಯ ದಲ್ಲಿ ನಾನು ಇದ್ದೇನೆ ಅಂದನು.

18:21b.MAT.018.021 ತರುವಾಯ ಪೇತ್ರನು ಆತನ ಬಳಿಗೆ ಬಂದು--ಕರ್ತನೇ, ನನ್ನ ಸಹೋದರನು ನನಗೆ ವಿರೋಧ ವಾಗಿ ಪಾಪಮಾಡಿದರೆ ನಾನು ಎಷ್ಟು ಸಾರಿ ಅವನಿಗೆ ಕ್ಷಮಿಸಬೇಕು? ಏಳು ಸಾರಿಯೋ ಎಂದು ಕೇಳಿದನು.

18:22b.MAT.018.022 ಯೇಸು ಅವನಿಗೆ--ಏಳು ಸಾರಿಯಲ್ಲ, ಆದರೆ ಏಳೆಪ್ಪತ್ತು ಸಾರಿ ಎಂದು ನಾನು ನಿನಗೆ ಹೇಳುತ್ತೇನೆ;

18:23b.MAT.018.023 ಆದದರಿಂದ ಪರಲೋಕ ರಾಜ್ಯವು ತನ್ನ ಸೇವಕರಿಂದ ಲೆಕ್ಕವನ್ನು ತಕ್ಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.

18:24b.MAT.018.024 ಅವನು ಲೆಕ್ಕವನ್ನು ತಕ್ಕೊಳ್ಳಲು ಪ್ರಾರಂಭಿಸಿದಾಗ ಹತ್ತು ಸಾವಿರ ತಲಾಂತುಗಳನ್ನು ಸಾಲ ಕೊಡಬೇಕಾದವನನ್ನು ಅವನ ಬಳಿಗೆ ತಂದರು.

18:25b.MAT.018.025 ಆದರೆ ಕೊಡುವದಕ್ಕೆ ಅವನಿಗೆ ಏನೂ ಇಲ್ಲದ್ದರಿಂದ ಅವನನ್ನೂ ಅವನ ಹೆಂಡತಿಯನ್ನೂ ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಸಾಲ ತೀರಿಸಬೇಕೆಂದು ಅವನ ಯಜಮಾನನು ಅಪ್ಪಣೆ ಕೊಟ್ಟನು.

18:26b.MAT.018.026 ಆಗ ಆ ಸೇವಕನು ನೆಲಕ್ಕೆ ಬಿದ್ದು ಅವನನ್ನು ವಂದಿಸಿ--ಧಣಿಯೇ, ನನ್ನನ್ನು ತಾಳಿಕೋ; ನಾನು ಎಲ್ಲವನ್ನು ನಿನಗೆ ಸಲ್ಲಿಸುವೆನು ಎಂದು ಹೇಳಿದನು.

18:27b.MAT.018.027 ಆ ಸೇವಕನ ಧಣಿಯು ಅವನ ಮೇಲೆ ಕನಿಕರಪಟ್ಟು ಅವನನ್ನು ಬಿಡಿಸಿ ಅವನ ಸಾಲವನ್ನೆಲ್ಲಾ ಬಿಟ್ಟು ಬಿಟ್ಟನು.

18:28b.MAT.018.028 ಆದರೆ ಅದೇ ಸೇವಕನು ಹೊರಗೆ ಹೋಗಿ ತನಗೆ ನೂರು ದೇನಾರುಗಳನ್ನು ಸಾಲ ಕೊಡಬೇಕಾಗಿದ್ದ ತನ್ನ ಜೊತೆ ಸೇವಕರಲ್ಲಿ ಒಬ್ಬನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಸುಕಿ--ನನ್ನ ಸಾಲವನ್ನು ತೀರಿಸು ಅಂದನು.

18:29b.MAT.018.029 ಆಗ ಅವನ ಜೊತೇ ಸೇವಕನು ಅವನ ಪಾದಕ್ಕೆ ಬಿದ್ದು ಅವನಿಗೆ--ನನ್ನನ್ನು ತಾಳಿಕೋ; ನಾನು ನಿನ್ನದನ್ನೆಲ್ಲಾ ತೀರಿಸುತ್ತೇನೆ ಎಂದು ಅವನನ್ನು ಬೇಡಿಕೊಂಡನು.

18:30b.MAT.018.030 ಅವನು ಅದಕ್ಕೆ ಒಪ್ಪದೆ ಹೊರಟುಹೋಗಿ ತನ್ನ ಸಾಲವನ್ನು ತೀರಿಸುವ ವರೆಗೆ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು.

18:31b.MAT.018.031 ಹೀಗೆ ಅವನ ಜೊತೆ ಸೇವಕರು ನಡೆದದ್ದನ್ನು ನೋಡಿ ಬಹಳ ವ್ಯಥೆಪಟ್ಟು ಹೋಗಿ ತಮ್ಮ ಧಣಿಗೆ ನಡೆದದ್ದೆಲ್ಲವನ್ನು ತಿಳಿಯಪಡಿಸಿದರು.

18:32b.MAT.018.032 ಆಗ ಅವನ ಧಣಿಯು ಅವನನ್ನು ತನ್ನ ಬಳಿಗೆ ಕರೆದು ಅವನಿಗೆ--ಓ ದುಷ್ಟ ಸೇವಕನೇ, ನೀನು ನನ್ನನ್ನು ಬೇಡಿಕೊಂಡದ್ದರಿಂದ ನಾನು ನಿನ್ನ ಸಾಲವನ್ನೆಲಾ ಮನ್ನಿಸಿದೆನು.

18:33b.MAT.018.033 ನಾನು ನಿನ್ನ ಮೇಲೆ ಕರುಣೆ ತೋರಿಸಿದಂತೆಯೇ ನೀನು ಸಹ ನಿನ್ನ ಜೊತೇ ಸೇವಕನ ಮೇಲೆ ಕರುಣೆಯನ್ನು ತೋರಿಸಬೇಕಾಗಿ ತ್ತಲ್ಲವೇ ಎಂದು ಹೇಳಿದನು.

18:34b.MAT.018.034 ಅವನ ಧಣಿಯು ಕೋಪಗೊಂಡು ತನಗೆ ಕೊಡಬೇಕಾದ ಸಾಲವನ್ನೆಲ್ಲಾ ತೀರಿಸುವ ತನಕ ಅವನನ್ನು ಸಂಕಟಪಡಿಸುವವರಿಗೆ ಒಪ್ಪಿಸಿದನು.ಅದರಂತೆಯೇ ನಿಮ್ಮಲ್ಲಿ ಪ್ರತಿಯೊ ಬ್ಬನು ಹೃದಯಪೂರ್ವಕವಾಗಿ ತನ್ನ ಸಹೋದರನ ತಪ್ಪುಗಳನ್ನು ಕ್ಷಮಿಸದೆಹೋದರೆ ಪರಲೋಕದಲ್ಲಿರುವ ನನ್ನ ತಂದೆಯೂ ನಿಮಗೆ ಹಾಗೆಯೇ ಮಾಡುವನು ಅಂದನು.

18:35b.MAT.018.035 ಅದರಂತೆಯೇ ನಿಮ್ಮಲ್ಲಿ ಪ್ರತಿಯೊ ಬ್ಬನು ಹೃದಯಪೂರ್ವಕವಾಗಿ ತನ್ನ ಸಹೋದರನ ತಪ್ಪುಗಳನ್ನು ಕ್ಷಮಿಸದೆಹೋದರೆ ಪರಲೋಕದಲ್ಲಿರುವ ನನ್ನ ತಂದೆಯೂ ನಿಮಗೆ ಹಾಗೆಯೇ ಮಾಡುವನು ಅಂದನು.

19

19:1b.MAT.019.001 ಯೇಸು ಆ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ ಗಲಿಲಾಯದಿಂದ ಹೊರಟು ಯೊರ್ದನಿನ ಆಚೆಯಿದ್ದ ತೀರಗಳಿಗೆ ಬಂದನು.

19:2b.MAT.019.002 ಜನರ ದೊಡ್ಡ ಸಮೂಹಗಳು ಆತನನ್ನು ಹಿಂಬಾಲಿ ಸಿದವು; ಮತ್ತು ಆತನು ಅವರನ್ನು ಅಲ್ಲಿ ಸ್ವಸ್ಥ ಮಾಡಿದನು.

19:3b.MAT.019.003 ಆಗ ಫರಿಸಾಯರು ಸಹ ಆತನನ್ನು ಶೋಧಿಸುವದ ಕ್ಕಾಗಿ ಆತನ ಬಳಿಗೆ ಬಂದು -- ಒಬ್ಬ ಮನುಷ್ಯನು ಯಾವ ಕಾರಣದಿಂದಲಾದರೂ ತನ್ನ ಹೆಂಡತಿಯನ್ನು ಬಿಟ್ಟು ಬಿಡುವದು ಅವನಿಗೆ ನ್ಯಾಯವೋ ಎಂದು ಕೇಳಿದರು.

19:4b.MAT.019.004 ಆತನು ಪ್ರತ್ಯುತ್ತರವಾಗಿ ಅವರಿಗೆ-- ಆದಿಯಲ್ಲಿ ಉಂಟುಮಾಡಿದಾತನು ಅವರನ್ನು ಗಂಡು ಹೆಣ್ಣಾಗಿ ಉಂಟುಮಾಡಿದನು.

19:5b.MAT.019.005 ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಹೀಗೆ ಅವರಿಬ್ಬರೂ ಒಂದೇ ಶರೀರ ವಾಗಿರುವರು ಎಂದು ಹೇಳಿದ್ದನ್ನು ನೀವು ಓದ ಲಿಲ್ಲವೋ?

19:6b.MAT.019.006 ಆದದರಿಂದ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ. ಆದಕಾರಣ ದೇವರು ಕೂಡಿ ಸಿದ್ದನ್ನು ಮನುಷ್ಯನು ಅಗಲಿಸಬಾರದು ಎಂದು ಹೇಳಿ ದನು.

19:7b.MAT.019.007 ಅದಕ್ಕೆ ಅವರು ಆತನಿಗೆ--ಹೀಗಾದರೆ ತ್ಯಾಗ ಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟುಬಿಡಬೇಕೆಂದು ಮೋಶೆಯು ಯಾಕೆ ಅಪ್ಪಣೆಕೊಟ್ಟನು ಎಂದು ಕೇಳಿದರು.

19:8b.MAT.019.008 ಆತನು ಅವರಿಗೆ--ಮೋಶೆಯು ನಿಮ್ಮ ಹೃದಯದ ಕಾಠಿಣ್ಯತೆಯ ದೆಸೆಯಿಂದ ನಿಮ್ಮ ಹೆಂಡತಿ ಯರನ್ನು ಬಿಟ್ಟುಬಿಡುವದಕ್ಕೆ ಅಪ್ಪಣೆಕೊಟ್ಟನು. ಆದರೆ ಆದಿಯಿಂದ ಅದು ಹಾಗೆ ಇರಲಿಲ್ಲ ಅಂದನು.

19:9b.MAT.019.009 ನಾನು ನಿಮಗೆ ಹೇಳುವದೇನಂದರೆ--ಹಾದರದ ಕಾರಣದಿಂ ದಲ್ಲದೆ ಯಾವನಾದರೂ ತನ್ನ ಹೆಂಡತಿಯನ್ನು ಬಿಟು ಮತ್ತೊಬ್ಬಳನ್ನು ಮದುವೆಯಾದರೆ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ. ಗಂಡ ಬಿಟ್ಟವಳನ್ನು ಮದುವೆ ಮಾಡಿಕೊಳ್ಳುವವನು ವ್ಯಭಿಚಾರ ಮಾಡುತ್ತಾನೆ.

19:10b.MAT.019.010 ಆಗ ಆತನ ಶಿಷ್ಯರು ಆತನಿಗೆ-- ಒಬ್ಬ ಮನುಷ್ಯನ ಪರಿಸ್ಥಿತಿ ಯು ತನ್ನ ಹೆಂಡತಿಯೊಂದಿಗೆ ಹೀಗಿರುವದಾದರೆ ಮದು ವೆಯಾಗುವದು ಒಳ್ಳೇದಲ್ಲ ಅಂದಾಗ.

19:11b.MAT.019.011 ಆತನು ಅವರಿಗೆ--ಯಾರಿಗೆ ಇದು ಕೊಡಲ್ಪಟ್ಟಿದೆಯೋ ಅವರೇ ಹೊರತು ಎಲ್ಲರೂ ಈ ಮಾತನ್ನು ಅಂಗೀಕರಿಸಲಾರರು.

19:12b.MAT.019.012 ಯಾಕಂದರೆ ತಮ್ಮ ತಾಯಿಯ ಗರ್ಭದಿಂದ ಹುಟ್ಟಿ ದಾಗಲೇ ಕೆಲವರು ನಪುಂಸಕರಾದವರಿದ್ದಾರೆ, ಮತ್ತು ಕೆಲವರು ಮನುಷ್ಯರಿಂದ ನಪುಂಸಕರಾಗಿ ಮಾಡಲ್ಪಟ್ಟ ವರು ಇದ್ದಾರೆ, ಇನ್ನು ಕೆಲವರು ಪರಲೋಕರಾಜ್ಯದ ನಿಮಿತ್ತವಾಗಿ ತಮ್ಮನ್ನು ತಾವೇ ನಪುಂಸಕರಾಗ ಮಾಡಿ ಕೊಂಡವರೂ ಇದ್ದಾರೆ; ಇದ

19:13b.MAT.019.013 ತರುವಾಯ ಆತನು ತನ್ನ ಕೈಗಳನ್ನಿಟ್ಟು ಪ್ರಾರ್ಥಿಸು ವಂತೆ ಕೆಲವರು ಚಿಕ್ಕಮಕ್ಕಳನ್ನು ಆತನ ಬಳಿಗೆ ತಂದರು. ಆಗ ಶಿಷ್ಯರು ಅವರನ್ನು ಗದರಿಸಿದರು.

19:14b.MAT.019.014 ಆದರೆ ಯೇಸು--ಚಿಕ್ಕಮಕ್ಕಳನ್ನು ಬಿಡಿರಿ, ನನ್ನ ಬಳಿಗೆ ಬಾರ ದಂತೆ ಅವುಗಳಿಗೆ ಅಡ್ಡಿ ಮಾಡಬೇಡಿರಿ; ಯಾಕಂದರೆ ಪರಲೋಕರಾಜ್ಯವು ಇಂಥವರದೇ ಅಂದನು.

19:15b.MAT.019.015 ಮತ್ತು ಆತನು ಅವುಗಳ ಮೇಲೆ ತನ್ನ ಕೈಗಳನ್ನಿಟ್ಟು ಅಲ್ಲಿಂದ ಹೊರಟು ಹೋದನು.

19:16b.MAT.019.016 ಆಗ ಇಗೋ, ಒಬ್ಬನು ಬಂದು ಆತನಿಗೆ-- ಒಳ್ಳೇ ಬೋಧಕನೇ, ನಾನು ನಿತ್ಯಜೀವವನ್ನು ಹೊಂದುವದಕ್ಕೆ ಯಾವ ಒಳ್ಳೇ ಕಾರ್ಯವನ್ನು ಮಾಡ ಬೇಕು ಎಂದು ಕೇಳಿದನು.

19:17b.MAT.019.017 ಆಗ ಆತನು ಅವನಿಗೆ--ನನ್ನನ್ನು ಒಳ್ಳೆಯವನೆಂದು ನೀನು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವ ನಲ್ಲ; ಆದರೆ ನೀನು ಜೀವದಲ್ಲಿ ಸೇರಬೇಕೆಂದು ಅಪೇ ಕ್ಷಿಸಿದರೆ(ದೇವರ)ಆಜ್ಞೆಗಳನ್ನು ಕೈಕೊಂಡು ನಡೆದುಕೋ ಅಂದನು.

19:18b.MAT.019.018 ಅವನು ಆತನಿಗೆ--ಅವು ಯಾವವು ಎಂದು ಕೇಳಿದನು. ಅದಕ್ಕೆ ಯೇಸು--ನೀನು ನರಹತ್ಯ ಮಾಡಬಾರದು, ನೀನು ವ್ಯಭಿಚಾರ ಮಾಡಬಾರದು, ನೀನು ಕದಿಯ ಬಾರದು, ನೀನು ಸುಳ್ಳುಸಾಕ್ಷಿ ಹೇಳ ಬಾರದು.

19:19b.MAT.019.019 ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸಬೇಕು; ಮತ್ತು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಮಾಡ ಬೇಕು ಎಂದು ಹೇಳಿದನು.

19:20b.MAT.019.020 ಆಗ ಆ ಯೌವನಸ್ಥನು ಆತನಿಗೆ--ಇವೆಲ್ಲವುಗಳನ್ನು ನಾನು ಬಾಲ್ಯದಿಂದಲೇ ಕೈಕೊಂಡಿದ್ದೇನೆ; ಇನ್ನು ನನಗೇನು ಕಡಿಮೆಯಾಗಿದೆ ಎಂದು ಕೇಳಿದನು.

19:21b.MAT.019.021 ಯೇಸು ಅವನಿಗೆ--ನೀನು ಸಂಪೂರ್ಣನಾಗಲು ಅಪೇಕ್ಷಿಸಿದರೆ ಹೋಗಿ ನಿನಗೆ ಇದ್ದದ್ದನ್ನು ಮಾರಿ ಬಡವರಿಗೆ ಕೊಡು; ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವದು; ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು ಎಂದು ಹೇಳಿದನು.

19:22b.MAT.019.022 ಆದರೆ ಆ ಯೌವನಸ್ಥನು ಆತನು ಹೇಳಿದ್ದನ್ನು ಕೇಳಿ ದುಃಖ ದಿಂದ ಹೊರಟುಹೋದನು. ಯಾಕಂದರೆ ಅವನಿಗೆ ಬಹಳ ಆಸ್ತಿ ಇತ್ತು.

19:23b.MAT.019.023 ತರುವಾಯ ಯೇಸು ತನ್ನ ಶಿಷ್ಯರಿಗೆ-- ಐಶ್ವರ್ಯ ವಂತನು ಪರಲೋಕ ರಾಜ್ಯದಲ್ಲಿ ಸೇರುವದು ಕಷ್ಟ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.

19:24b.MAT.019.024 ತಿರಿಗಿ ನಾನು ನಿಮಗೆ ಹೇಳುವದೇನಂದರೆ-- ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಸೂಜಿಯ ಕಣ್ಣಿನೊಳಗೆ ಒಂಟೆಯು ನುಗ್ಗುವದು ಸುಲಭ ಅಂದನು.

19:25b.MAT.019.025 ಇದನ್ನು ಕೇಳಿದಾಗ ಆತನ ಶಿಷ್ಯರು ಅತ್ಯಂತ ವಿಸ್ಮಯಗೊಂಡು-- ಹಾಗಾದರೆ ರಕ್ಷಿಸಲ್ಪಡುವವರು ಯಾರು ಎಂದು ಕೇಳಿದರು.

19:26b.MAT.019.026 ಅದಕ್ಕೆ ಯೇಸು ಅವರನ್ನು ದೃಷ್ಟಿಸಿ ನೋಡಿ ಅವರಿಗೆ--ಇದು ಮನುಷ್ಯರಿಗೆ ಅಸಾಧ್ಯ; ಆದರೆ ದೇವರಿಗೆ ಎಲ್ಲವು ಸಾಧ್ಯವೇ ಎಂದು ಹೇಳಿದನು.

19:27b.MAT.019.027 ಆಮೇಲೆ ಪೇತ್ರನು ಆತನಿಗೆ--ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದೆವು; ಆದದ ರಿಂದ ನಮಗೆ ಏನು ದೊರೆಯುವದು ಎಂದು ಕೇಳಿದನು.

19:28b.MAT.019.028 ಯೇಸು ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನ ದಲ್ಲಿ ಕೂತುಕೊಂಡಿರಲು ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾಯೇಲಿನ ಹನ್ನೆರಡು ಗೋತ್ರ ಗಳವರಿಗೆ ನ್ಯಾ

19:29b.MAT.019.029 ಮತ್ತು ತನ್ನ ಮನೆಗಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ತಂದೆಯನ್ನಾಗಲೀ ತಾಯಿಯನ್ನಾಗಲೀ ಮಕ್ಕಳನ್ನಾಗಲೀ ಭೂಮಿಯನ್ನಾಗಲೀ ನನ್ನ ಹೆಸರಿ ನಿಮಿತ್ತವಾಗಿ ಬಿಟ್ಟುಬಿಡುವ ಪ್ರತಿಯೊಬ್ಬನು ನೂರರಷ್ಟು ಹೊಂದಿಕೊಳ್ಳುವನು; ಮತ್ತು ನಿತ್ಯಜೀವವನ್ನು ಬಾಧ್ಯ ವಾಗಿ ಹೊಂದುವನುಆದರೆ ಮೊದಲನೆಯ ವರಾದ ಬಹುಮಂದಿ ಕಡೆಯವರಾಗುವರು; ಮತ್ತು ಕಡೆಯವರಾದವರು ಮೊದಲನೆಯವರಾಗುವರು.

19:30b.MAT.019.030 ಆದರೆ ಮೊದಲನೆಯ ವರಾದ ಬಹುಮಂದಿ ಕಡೆಯವರಾಗುವರು; ಮತ್ತು ಕಡೆಯವರಾದವರು ಮೊದಲನೆಯವರಾಗುವರು.

20

20:1b.MAT.020.001 ತನ್ನ ದ್ರಾಕ್ಷೇ ತೋಟಕ್ಕೆ ಕೂಲಿಯಾಳು ಗಳನ್ನು ಕರೆಯುವದಕ್ಕಾಗಿ ಬೆಳಿಗ್ಗೆ ಹೊರಟ ಮನೇ ಯಜಮಾನನಿಗೆ ಪರಲೋಕರಾಜ್ಯವು ಹೋಲಿ ಕೆಯಾಗಿದೆ.

20:2b.MAT.020.002 ಅವನು ದಿನಕ್ಕೆ ಒಂದು ಪಾವಲಿಯಂತೆ (ಪೆನ್ನಿ) ಕೂಲಿಯಾಳುಗಳೊಂದಿಗೆ ಒಪ್ಪಂದ ಮಾಡಿ ಕೊಂಡು ತನ್ನ ದ್ರಾಕ್ಷೇತೋಟಕ್ಕೆ ಅವರನ್ನು ಕಳುಹಿಸಿ ಕೊಟ್ಟನು.

20:3b.MAT.020.003 ಮತ್ತು ಅವನು ಸುಮಾರು ಮೂರನೆಯ ತಾಸಿನಲ್ಲಿ ಹೊರಗೆಹೋಗಿ ಇನ್ನು ಕೆಲವರು ಸಂತೆಯ ಸ್ಥಳದಲ್ಲಿ ಕೆಲಸವಿಲ್ಲದೆ ನಿಂತಿರುವದನ್ನು ಕಂಡು

20:4b.MAT.020.004 ಅವರಿಗೆ--ನೀವು ಸಹ ದ್ರಾಕ್ಷೇ ತೋಟಕ್ಕೆ ಹೋಗಿರಿ; ಸರಿಯಾದ ಕೂಲಿಯನ್ನು ನಾನು ನಿಮಗೆ ಕೊಡುವೆನು ಎಂದು ಹೇಳಿದನು. ಆಗ ಅವರು ಹೊರಟು ಹೋದರು.

20:5b.MAT.020.005 ಅವನು ಸುಮಾರು ಆರನೆಯ ಮತ್ತು ಒಂಭತ್ತನೆಯ ತಾಸಿನಲ್ಲಿ ತಿರಿಗಿ ಹೋಗಿ ಹಾಗೆಯೇ ಮಾಡಿದನು.

20:6b.MAT.020.006 ತರುವಾಯ ಸುಮಾರು ಹನ್ನೊಂದ ನೆಯ ತಾಸಿನಲ್ಲಿ ಅವನು ಹೊರಗೆಹೋಗಿ ಬೇರೆ ಕೆಲವರು ಕೆಲಸವಿಲ್ಲದೆ ನಿಂತಿರುವದನ್ನು ಕಂಡು ಅವರಿಗೆ--ನೀವು ದಿನವೆಲ್ಲಾ ಇಲ್ಲಿ ಕೆಲಸವಿಲ್ಲದೆ ನಿಂತಿರುವದೇಕೆ ಎಂದು ಕೇಳಿದನು.

20:7b.MAT.020.007 ಅವರು ಅವನಿಗೆ--ಯಾಕಂದರೆ ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ ಅಂದರು. ಆಗ ಅವನು ಅವರಿಗೆ--ನೀವು ಸಹ ದ್ರಾಕ್ಷೇತೋಟಕ್ಕೆ ಹೋಗಿರಿ ಮತ್ತು ಸರಿಯಾದದ್ದನ್ನು ನೀವು ಹೊಂದುವಿರಿ ಎಂದು ಹೇಳಿ ದನು.

20:8b.MAT.020.008 ಹೀಗೆ ಸಾಯಂಕಾಲವಾದಾಗ ದ್ರಾಕ್ಷೇತೋಟ ದ ಯಜಮಾನನು ತನ್ನ ಮನೇವಾರ್ತೆಯವನಿಗೆ-- ಕೂಲಿಯಾಳುಗಳನ್ನು ಕರೆದು ಕೊನೆಯವನಿಂದ ಪ್ರಾರಂಭಿಸಿ ಮೊದಲನೆಯವನ ವರೆಗೆ ಕೂಲಿಯನ್ನು ಕೊಡು ಎಂದು ಹೇಳಿದನು.

20:9b.MAT.020.009 ಸುಮಾರು ಹನ್ನೊಂದನೆ ಯ ತಾಸಿನಲ್ಲಿ ಕರೆಯಲ್ಪಟ್ಟವರಾದ ಪ್ರತಿಯೊಬ್ಬನು ಒಂದೊಂದು ಪಾವಲಿಯನ್ನು ಹೊಂದಿದನು.

20:10b.MAT.020.010 ಆದರೆ ಮೊದಲು ಬಂದವರು ತಮಗೆ ಹೆಚ್ಚು ದೊರೆಯುವ ದೆಂದು ನೆನಸಿದರು. ಆದರೂ ಅವರಲ್ಲಿ ಪ್ರತಿಯೊಬ್ಬನು ಅದೇ ರೀತಿಯಲ್ಲಿ ಒಂದೊಂದು ಪಾವಲಿಯನ್ನು ಹೊಂದಿದನು.

20:11b.MAT.020.011 ಅವರು ಅದನ್ನು ಹೊಂದಿದಾಗ ಮನೇ ಯಜಮಾನನಿಗೆ ವಿರೋಧವಾಗಿ ಗುಣು ಗುಟ್ಟುತ್ತಾ--

20:12b.MAT.020.012 ಕಡೆಯವರಾದ ಇವರು ಒಂದೇ ತಾಸು ಕೆಲಸ ಮಾಡಿದ್ದಾರೆ; ಆದರೆ ದಿನವೆಲ್ಲಾ ಬಿಸಿಲಿನಲ್ಲಿ ಭಾರ ಹೊತ್ತು ಕೆಲಸ ಮಾಡಿದ ನಮಗೆ ನೀನು ಅವರನ್ನು ಸಮಮಾಡಿದ್ದೀ ಅಂದರು.

20:13b.MAT.020.013 ಆದರೆ ಅವನು ಅವರಲ್ಲಿ ಒಬ್ಬನಿಗೆ ಪ್ರತ್ಯುತ್ತರವಾಗಿ--ಸ್ನೇಹಿ ತನೇ, ನಾನು ನಿನಗೆ ಅನ್ಯಾಯ ಮಾಡಲಿಲ್ಲ; ಒಂದು ಪಾವಲಿಗೆ ನೀನು ನನ್ನೊಂದಿಗೆ ಒಪ್ಪಂದ ಮಾಡಿಕೊಳ್ಳ ಲಿಲ್ಲವೇ?

20:14b.MAT.020.014 ನಿನ್ನದನ್ನು ತಕ್ಕೊಂಡು ಹೋಗು; ನಿನಗೆ ನಾನು ಕೊಟ್ಟಂತೆಯೇ ಈ ಕಡೆಯವನಿಗೂ ಕೊಡುವೆನು.

20:15b.MAT.020.015 ನನ್ನ ಸ್ವಂತದ್ದನ್ನು ನನ್ನ ಇಷ್ಟಬಂದಂತೆ ಮಾಡುವದು ನನಗೆ ನ್ಯಾಯವಲ್ಲವೋ? ನಾನು ಒಳ್ಳೆಯವನಾದ ದರಿಂದ ನಿನ್ನ ಕಣ್ಣು ಕೆಟ್ಟದ್ದಾಗಿದೆಯೋ ಅಂದನು.

20:16b.MAT.020.016 ಹೀಗೆ ಕಡೆಯವರು ಮೊದಲನೆಯವರಾಗುವರು; ಮೊದಲನೆಯವರು ಕಡೆಯವರಾಗುವರು. ಯಾಕಂದರೆ ಕರೆಯಲ್ಪಟ್ಟವರು ಅನೇಕರು; ಆದರೆ ಆಯಲ್ಪಟ್ಟವರು ಸ್ವಲ್ಪ ಜನ ಎಂದು ಹೇಳಿದನು.

20:17b.MAT.020.017 ತರುವಾಯ ಯೇಸು ಯೆರೂಸಲೇಮಿಗೆ ಹೋಗುತ್ತಿರುವಾಗ ಹನ್ನೆರಡು ಮಂದಿ ಶಿಷ್ಯರನ್ನು ದಾರಿಯಲ್ಲಿ ವಿಂಗಡವಾಗಿ ಕರೆದು ಅವರಿಗೆ--

20:18b.MAT.020.018 ಇಗೋ, ನಾವು ಯೆರೂಸಲೇಮಿಗೆ ಹೋಗುತ್ತೇವೆ. ಅಲ್ಲಿ ಮನುಷ್ಯ ಕುಮಾರನು ಪ್ರಧಾನ ಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡುವನು; ಅವರು ಆತನಿಗೆ ಮರಣ ದಂಡನೆಯನ್ನು ವಿಧಿಸುವರು.

20:19b.MAT.020.019 ಇದಲ್ಲದೆ ಆತನನ್ನು ಹಾಸ್ಯ ಮಾಡು ವದಕ್ಕೂ ಕೊರಡೆಗಳಿಂದ ಹೊಡೆಯುವದಕ್ಕೂ ಶಿಲುಬೆಗೆ ಹಾಕುವದಕ್ಕೂ ಆತನನ್ನು ಅನ್ಯಜನರಿಗೆ ಒಪ್ಪಿಸಿಕೊಡುವರು; ಮತ್ತು ಮೂರನೆಯ ದಿನದಲ್ಲಿ ಆತನು ತಿರಿಗಿ ಎದ್ದು ಬರುವನು ಎಂದು ಹೇಳಿದನು.

20:20b.MAT.020.020 ತರುವಾಯ ಜೆಬೆದಾಯನ ಮಕ್ಕಳ ತಾಯಿಯು ತನ್ನ ಕುಮಾರರೊಂದಿಗೆ ಆತನ ಬಳಿಗೆ ಬಂದು ಆತ ನನ್ನು ಆರಾಧಿಸುತ್ತಾ ಆತನನ್ನು ಏನೋ ಬೇಡಿಕೊಳ್ಳ ಬೇಕೆಂದು ಅಪೇಕ್ಷಿಸಿದಳು.

20:21b.MAT.020.021 ಆತನು ಆಕೆಗೆ--ನೀನು ಏನು ಅಪೇಕ್ಷಿಸುತ್ತೀ ಎಂದು ಕೇಳಲು ಆಕೆಯು ಆತನಿಗೆ -- ನಿನ್ನ ರಾಜ್ಯದಲ್ಲಿ ಈ ನನ್ನ ಇಬ್ಬರು ಕುಮಾರರು ಒಬ್ಬನು ನಿನ್ನ ಬಲಗಡೆಯಲ್ಲೂ ಇನ್ನೊಬ್ಬನು ನಿನ್ನ ಎಡಗಡೆಯಲ್ಲೂ ಕೂತುಕೊಳ್ಳುವಂತೆ ಅನುಗ್ರಹಿಸ ಬೇಕು ಎಂದು ಬೇಡಿಕೊಂಡಳು.

20:22b.MAT.020.022 ಆದರೆ ಯೇಸು ಪ್ರತ್ಯುತ್ತರವಾಗಿ -- ನೀವು ಬೇಡಿಕೊಳ್ಳುವದೇನೆಂದು ನಿಮಗೆ ತಿಳಿಯದು. ನಾನು ಕುಡಿಯುವದಕ್ಕಿರುವ ಪಾತ್ರೆಯಲ್ಲಿ ಕುಡಿಯಲು ನಿಮ್ಮಿಂದಾದೀತೇ? ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದು ವಿರೋ ಎಂದು ಕೇಳಿದಾಗ ಅವರು ಆತನಿಗೆ--ನಮ್ಮಿಂದ ಆಗುವದು ಎಂದು ಹೇಳಿದ

20:23b.MAT.020.023 ಮತ್ತು ಆತನು ಅವರಿಗೆ--ನನ್ನ ಪಾತ್ರೆಯಲ್ಲಿ ನೀವು ಕುಡಿಯು ವದು ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದುವದು ನಿಜ; ಆದರೆ ನನ್ನ ಬಲಗಡೆಯಲ್ಲಾ ಗಲೀ ಎಡಗಡೆಯಲ್ಲಾಗಲೀ ಕೂತುಕೊಳ್ಳುವಂತೆ ಅನುಗ್ರಹಿಸುವದು ನನ್ನದಲ್ಲ; ಆದರೆ ನನ್ನ ತಂದೆಯಿಂದ ಯಾರಿಗೋಸ್ಕರ ಅದು ಸಿ

20:24b.MAT.020.024 ಬೇರೆ ಹತ್ತು ಮಂದಿಯು ಅದನ್ನು ಕೇಳಿ ಆ ಇಬ್ಬರು ಸಹೋದ ರರಿಗೆ ವಿರೋಧವಾಗಿ ಕೋಪಗೊಂಡರು.

20:25b.MAT.020.025 ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು--ಅನ್ಯ ಜನಾಂಗಗಳ ಅಧಿಪತಿಗಳು ಅವರ ಮೇಲೆ ದೊರೆತನ ಮಾಡುವರೆಂದೂ ದೊಡ್ಡವರು ಅವರ ಮೇಲೆ ಅಧಿಕಾರವನ್ನು ನಡಿಸುವರೆಂದೂ ನಿಮಗೆ ತಿಳಿದಿದೆ. ಆದರೆ ನಿಮ್ಮಲ್ಲಿ ಅದು ಹಾಗಿರಬಾರದು.

20:26b.MAT.020.026 ನಿಮ್ಮಲ್ಲಿ ದೊಡ್ಡವನಾಗಿರಬೇಕೆಂದಿರುವವನು ನಿಮ್ಮ ಸೇವಕನಾಗಿ ರಲಿ

20:27b.MAT.020.027 ನಿಮ್ಮಲ್ಲಿ ಯಾವನಾದರೂ ಪ್ರಮುಖನಾಗಬೇಕೆ ಂದಿದ್ದರೆ ಅವನು ನಿಮ್ಮ ಆಳಾಗಿರಲಿ.

20:28b.MAT.020.028 ಮನುಷ್ಯ ಕುಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಸೇವೆ ಮಾಡುವದಕ್ಕಾಗಿಯೂ ಅನೇಕರಿಗಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕಾಗಿಯೂ ಬಂದನು ಎಂದು ಹೇಳಿದನು.

20:29b.MAT.020.029 ಅವರು ಯೆರಿಕೋವಿನಿಂದ ಹೊರಟು ಹೋಗುತ್ತಿರುವಾಗ ಜನರು ದೊಡ್ಡ ಸಮೂಹವಾಗಿ ಆತನನ್ನು ಹಿಂಬಾಲಿಸಿದರು.

20:30b.MAT.020.030 ಆಗ ಇಗೋ, ಯೇಸು ಹಾದುಹೋಗುತ್ತಿದ್ದಾನೆಂದು ದಾರಿಯ ಮಗ್ಗುಲಲ್ಲಿ ಕೂತಿದ್ದ ಇಬ್ಬರು ಕುರುಡರು ಕೇಳಿ--ಓ ಕರ್ತನೇ, ದಾವೀದನಕುಮಾರನೇ, ನಮ್ಮ ಮೇಲೆ ಕರುಣೆಯಿಡು ಎಂದು ಕೂಗಿ ಹೇಳಿದರು.

20:31b.MAT.020.031 ಆದರೆ ಅವರು ಸುಮ್ಮನಿ ರುವಂತೆ ಜನರ ಸಮೂಹವು ಅವರನ್ನು ಗದರಿಸಿದರು. ಆದಾಗ್ಯೂ ಅವರು--ಓ ಕರ್ತನೇ, ದಾವೀದನಕುಮಾ ರನೇ, ನಮ್ಮ ಮೇಲೆ ಕರುಣೆ ಯಿಡು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡರು.

20:32b.MAT.020.032 ಆಗ ಯೇಸು ನಿಂತು ಅವರನ್ನು ಕರೆದು--ನಾನು ನಿಮಗೆ ಏನು ಮಾಡ ಬೇಕೆಂದು ನೀವು ಅಪೇಕ್ಷಿಸುತ್ತೀರಿ ಎಂದು ಕೇಳಿದನು.

20:33b.MAT.020.033 ಅವರು ಆತನಿಗೆ--ಕರ್ತನೇ, ನಮ್ಮ ಕಣ್ಣುಗಳು ತೆರೆಯಲ್ಪಡಬೇಕು ಅಂದರು.ಯೇಸು ಅವರ ಮೇಲೆ ಕನಿಕರಪಟ್ಟು ಅವರ ಕಣ್ಣುಗಳನ್ನು ಮುಟ್ಟಿದನು; ಕೂಡಲೆ ಅವರ ಕಣ್ಣುಗಳು ದೃಷ್ಟಿಹೊಂದಿದವು; ಮತ್ತು ಅವರು ಆತನನ್ನು ಹಿಂಬಾಲಿಸಿದರು.

20:34b.MAT.020.034 ಯೇಸು ಅವರ ಮೇಲೆ ಕನಿಕರಪಟ್ಟು ಅವರ ಕಣ್ಣುಗಳನ್ನು ಮುಟ್ಟಿದನು; ಕೂಡಲೆ ಅವರ ಕಣ್ಣುಗಳು ದೃಷ್ಟಿಹೊಂದಿದವು; ಮತ್ತು ಅವರು ಆತನನ್ನು ಹಿಂಬಾಲಿಸಿದರು.

21

21:1b.MAT.021.001 ಅವರು ಯೆರೂಸಲೇಮಿಗೆ ಸಮಾಪಿಸಿ ಎಣ್ಣೇ ಮರಗಳ ಗುಡ್ಡದ ಬೇತ್ಫಗೆಗೆ ಬಂದಾಗ ಯೇಸು ಇಬ್ಬರು ಶಿಷ್ಯರನ್ನು ಕಳುಹಿಸಿ ಅವರಿಗೆ--

21:2b.MAT.021.002 ನಿಮ್ಮ ಎದುರಿಗಿರುವ ಹಳ್ಳಿಗೆ ಹೋಗಿರಿ; ಆಗ ಒಂದು ಕತ್ತೆಯು ತನ್ನ ಮರಿಯೊಂದಿಗೆ ಕಟ್ಟಲ್ಪಟ್ಟಿರುವದನ್ನು ನೀವು ತಕ್ಷಣವೇ ಕಾಣುವಿರಿ; ಅವುಗಳನ್ನು ಬಿಚ್ಚಿ ನನ್ನ ಬಳಿಗೆ ತಕ್ಕೊಂಡು ಬನ್ನಿರಿ.

21:3b.MAT.021.003 ಮತ್ತು ಯಾವನಾದರೂ ನಿಮಗೆ ಏನಾದರೂ ಹೇಳಿದರೆ ನೀವು ಅವನಿಗೆ--ಅವು ಕರ್ತನಿಗೆ ಬೇಕಾಗಿವೆ ಎಂದು ಹೇಳಿರಿ; ಆಗ ಅವನು ಅವುಗಳನ್ನು ಕೂಡಲೆ ಕಳುಹಿಸುವನು ಎಂದು ಹೇಳಿದನು.

21:4b.MAT.021.004 ಇದೆಲ್ಲವೂ ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರು ವಂತೆ ಆಯಿತು; ಅದೇನಂದರೆ--

21:5b.MAT.021.005 ಇಗೋ, ನಿನ್ನ ಅರಸನು ಸಾತ್ವಿಕನು, ಆತನು ಕತ್ತೆಯನ್ನೂ ಕತ್ತೆಯ ಮರಿಯನ್ನೂ ಹತ್ತಿದವನಾಗಿ ನಿನ್ನ ಬಳಿಗೆ ಬರುತ್ತಾನೆ ಎಂದು ಚೀಯೋನ್‌ ಕುಮಾರ್ತೆಗೆ ಹೇಳಿರಿ ಎಂಬದೇ.

21:6b.MAT.021.006 ಆಗ ಶಿಷ್ಯರು ಹೊರಟುಹೋಗಿ ಯೇಸು ತಮಗೆ ಅಪ್ಪಣೆಕೊಟ್ಟಂತೆಯೇ ಮಾಡಿದರು.

21:7b.MAT.021.007 ಮತ್ತು ಅವರು ಕತ್ತೆಯನ್ನೂ ಅದರ ಮರಿಯನ್ನೂ ತಂದು ಅವುಗಳ ಮೇಲೆ ತಮ್ಮ ವಸ್ತ್ರಗಳನ್ನು ಹಾಕಿ ಆತನನ್ನು ಆದರ ಮೇಲೆ ಕೂಡ್ರಿಸಿದರು.

21:8b.MAT.021.008 ಆಗ ಅತಿ ದೊಡ್ಡ ಜನರ ಸಮೂಹವು ತಮ್ಮ ವಸ್ತ್ರಗಳನ್ನು ದಾರಿಯಲ್ಲಿ ಹಾಸಿದರು; ಬೇರೆಯವರು ಮರಗಳಿಂದ ಕೊಂಬೆಗಳನ್ನು ಕತ್ತರಿಸಿ ದಾರಿಯಲ್ಲಿ ಹರಡಿದರು.

21:9b.MAT.021.009 ಆತನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು--ದಾವೀದನ ಕುಮಾರನಿಗೆ ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; ಮಹೋನ್ನತದಲ್ಲಿ ಹೊಸನ್ನ ಎಂದು ಕೂಗುತ್ತಾ ಹೇಳಿದರು.

21:10b.MAT.021.010 ಆತನು ಯೆರೂಸಲೇಮಿಗೆ ಬಂದಾಗ ಪಟ್ಟಣ ವೆಲ್ಲಾ ಕದಲಿ--ಈತನು ಯಾರು ಎಂದು ಕೇಳಿದರು.

21:11b.MAT.021.011 ಅದಕ್ಕೆ ಜನರ ಸಮೂಹವು --ಈತನು ಗಲಿಲಾಯ ದ ನಜರೇತಿನ ಪ್ರವಾದಿಯಾದ ಯೇಸುವು ಎಂದು ಹೇಳಿದರು.

21:12b.MAT.021.012 ಯೇಸು ದೇವಾಲಯದೊಳಗೆ ಹೋಗಿ ಅದರಲ್ಲಿ ಕ್ರಯ ವಿಕ್ರಯ ಮಾಡುವವರನ್ನೆಲ್ಲಾ ಹೊರಗೆ ಹಾಕಿ ಹಣ ಬದಲಾಯಿಸುವವರ ಮೇಜುಗಳನ್ನೂ ಪಾರಿ ವಾಳ ಮಾರುವವರ ಆಸನಗಳನ್ನೂ ಕೆಡವಿಹಾಕಿ ದನು.

21:13b.MAT.021.013 ಆತನು ಅವರಿಗೆ--ನನ್ನ ಮನೆಯು ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದಾಗಿ ಬರೆದದೆ; ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು.

21:14b.MAT.021.014 ಆಗ ಕುರುಡರು ಮತ್ತು ಕುಂಟರು ದೇವಾಲಯ ದಲ್ಲಿ ಆತನ ಬಳಿಗೆ ಬಂದರು; ಆತನು ಅವರನ್ನು ಸ್ವಸ್ಥ ಮಾಡಿದನು.

21:15b.MAT.021.015 ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಮತ್ತು ಮಕ್ಕಳು ದೇವಾಲಯ ದಲ್ಲಿ--ದಾವೀದನ ಕುಮಾರನಿಗೆ ಹೊಸನ್ನ ಎಂದು ಕೂಗುವದನ್ನು ಪ್ರಧಾನ ಯಾಜಕರೂ ಶಾಸ್ತ್ರಿಗಳೂ ನೋಡಿ ಕೋಪಗೊಂಡು ಆತನಿಗೆ--

21:16b.MAT.021.016 ಇವರು ಹೇಳುವದೇನೆಂದು ನೀನು ಕೇಳುತ್ತೀಯೋ ಎಂದು ಕೇಳಿದ್ದಕ್ಕೆ ಯೇಸು ಅವರಿಗೆ -- ಹೌದು, ಸಣ್ಣ ಮಕ್ಕಳ ಮತ್ತು ಮೊಲೇಕೂಸುಗಳ ಬಾಯಿಂದ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿದ್ದೀ ಎಂಬದನ್ನು ನೀವು ಎಂದಾದರೂ ಓದಲಿಲ್ಲವೋ ಅಂದನು.

21:17b.MAT.021.017 ಆತನು ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಹೋಗಿ ಅಲ್ಲಿ ಇಳುಕೊಂಡನು.

21:18b.MAT.021.018 ಬೆಳಿಗ್ಗೆ ಪಟ್ಟಣಕ್ಕೆ ಹಿಂದಿರುಗಿ ಬರುತ್ತಿದ್ದಾಗ ಆತನು ಹಸಿದಿದ್ದನು.

21:19b.MAT.021.019 ಆಗ ಆತನು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಅದರಲ್ಲಿ ಕಾಣಲಿಲ್ಲ. ಆಗ ಆತನು ಅದಕ್ಕೆ--ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ ಅಂದನು. ತಕ್ಷಣವೇ ಆ ಅಂಜೂರದ ಮರವು ಒಣಗಿ ಹೋಯಿತು.

21:20b.MAT.021.020 ಶಿಷ್ಯರು ಅದನ್ನು ನೋಡಿ ಆಶ್ಚರ್ಯ ದಿಂದ --ಎಷ್ಟು ಬೇಗನೆ ಈ ಅಂಜೂರದ ಮರವು ಒಣಗಿಹೋಯಿತಲ್ಲಾ ಎಂದು ಹೇಳಿದನು.

21:21b.MAT.021.021 ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನಿಮ್ಮಲ್ಲಿ ನಂಬಿಕೆಯಿದ್ದು ಮತ್ತು ಸಂದೇಹ ಪಡದೆಹೋದರೆ ಈ ಅಂಜೂರದ ಮರಕ್ಕೆ ಮಾಡಿದಂತೆ ಮಾಡುವದಲ್ಲದೆ ನೀವು ಈ ಗುಡ್ಡಕ್ಕೆ --ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು ಎಂದು ಹೇಳಿದರೂ ಅದು ಆಗುವ

21:22b.MAT.021.022 ನೀವು ನಂಬುವವ ರಾಗಿ ಪ್ರಾರ್ಥನೆಯಲ್ಲಿ ಏನೇನೂ ಕೇಳುವಿರೋ ಅವುಗಳನ್ನೆಲ್ಲಾ ಹೊಂದುವಿರಿ ಅಂದನು.

21:23b.MAT.021.023 ಆತನು ದೇವಾಲಯಕ್ಕೆ ಬಂದು ಬೋಧಿಸು ತ್ತಿದ್ದಾಗ ಪ್ರಧಾನಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು--ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಮತ್ತು ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು ಎಂದು ಕೇಳಿದರು.

21:24b.MAT.021.024 ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ಒಂದು ವಿಷಯ ನಿಮ್ಮನ್ನು ಕೇಳುತ್ತೇನೆ; ಅದನ್ನು ನೀವು ನನಗೆ ಹೇಳಿದರೆ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇ ನೆಂದು ನಿಮಗೆ ಹೇಳುವೆನು ಎಂದು ಹೇಳಿ--ಯೋಹಾನನ ಬಾಪ್ತಿಸ್ಮವು ಎಲ್ಲಿಂದ ಬಂತು?

21:25b.MAT.021.025 ಪರ ಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ ಎಂದು ಕೇಳಿದಾಗ ಅವರು ತಮ್ಮತಮ್ಮೊಳಗೆ ತರ್ಕಿ ಸುತ್ತಾ--ಪರಲೋಕದಿಂದ ಎಂದು ಹೇಳಿದರೆ ಆತನು ನಮಗೆ--ನೀವು ಅವನನ್ನು ಯಾಕೆ ನಂಬಲಿಲ್ಲ ಎಂದು ಹೇಳಾನು.

21:26b.MAT.021.026 ಮನುಷ್ಯರಿಂದ ಎಂದು ನಾವು ಹೇಳಿ ದರೆ ಜನರಿಗೆ ಭಯಪಡುತ್ತೇವೆ; ಯಾಕಂದರೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಎಣಿಸು ತ್ತಾರೆ ಎಂದು ಅಂದುಕೊಂಡರು.

21:27b.MAT.021.027 ತರುವಾಯ ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳ ಲಾರೆವು ಅಂದರು. ಅದಕ್ಕೆ ಆತನು ಅವರಿಗೆ-- ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವದಿಲ್ಲ.

21:28b.MAT.021.028 ನೀವು ನೆನಸುವದೇನು? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು; ಅವನು ಮೊದಲನೆಯವನ ಬಳಿಗೆ ಬಂದು--ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷೇತೋಟದಲ್ಲಿ ಕೆಲಸಮಾಡು ಎಂದು ಹೇಳಿದನು.

21:29b.MAT.021.029 ಅವನು ಪ್ರತ್ಯುತ್ತರವಾಗಿ--ನಾನು ಹೋಗುವದಿಲ್ಲ ಎಂದು ಹೇಳಿ ತರುವಾಯ ಪಶ್ಚಾ ತ್ತಾಪಪಟ್ಟು ಹೋದನು.

21:30b.MAT.021.030 ಆಮೇಲೆ ಅವನು ಎರಡ ನೆಯವನ ಬಳಿಗೆ ಬಂದು ಅದೇ ಪ್ರಕಾರ ಅವನಿಗೆ ಹೇಳಿದನು. ಅದಕ್ಕವನು ಪ್ರತ್ಯುತ್ತರವಾಗಿ--ಅಯ್ಯಾ, ನಾನು ಹೋಗುತ್ತೇನೆ ಎಂದು ಹೇಳಿ ಹೋಗಲಿಲ್ಲ.

21:31b.MAT.021.031 ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ.

21:32b.MAT.021.032 ಯಾಕಂದರೆ ಯೋಹಾನನು ನೀತಿಯ ಮಾರ್ಗದಲ್ಲಿ ನಿಮ್ಮ ಬಳಿಗೆ ಬಂದನು. ಮತ್ತು ನೀವು ಅವನನ್ನು ನಂಬಲಿಲ್ಲ; ಆದರೆ ಸುಂಕದವರೂ ಸೂಳೆಯರೂ ಅವನನ್ನು ನಂಬಿದರು; ನೀವು ಅದನ್ನು ನೋಡಿದ ಮೇಲೆಯೂ ಅವನನ್ನು ನಂಬುವಂತೆ ಪಶ್ಚಾತ್ತಾಪ ಪಡಲಿಲ್ಲ.

21:33b.MAT.021.033 ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಮನೇ ಯಜಮಾನನು ದ್ರಾಕ್ಷೇತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿ ಅದರೊಳಗೆ ತೊಟ್ಟಿಯನ್ನು ಅಗೆದು ಗೋಪುರವನ್ನು ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೋದನು.

21:34b.MAT.021.034 ಫಲದ ಕಾಲವು ಸಮಾಪಿಸಿದಾಗ ತನ್ನ ಫಲಗಳನ್ನು ಪಡಕೊಳ್ಳು ವದಕ್ಕೆ ತನ್ನ ಸೇವಕರನ್ನು ಒಕ್ಕಲಿಗರ ಬಳಿಗೆ ಕಳುಹಿಸಿಕೊಟ್ಟನು.

21:35b.MAT.021.035 ಆಗ ಒಕ್ಕಲಿಗರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು ಇನ್ನೊಬ್ಬ ನನ್ನು ಕೊಂದು ಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು.

21:36b.MAT.021.036 ಅವನು ತಿರಿಗಿ ಮೊದಲನೆಯವರಿಗಿಂತ ಹೆಚ್ಚು ಸೇವಕರನ್ನು ಕಳುಹಿಸಿಕೊಟ್ಟನು; ಅವರು ಅದೇ ರೀತಿಯಲ್ಲಿ ಅವರಿಗೂ ಮಾಡಿದರು.

21:37b.MAT.021.037 ಆದರೆ ಅವನು-- ನನ್ನ ಮಗನನ್ನಾದರೂ ಅವರು ಸನ್ಮಾನಿ ಸಾರು ಎಂದು ಅಂದುಕೊಂಡು ಕಟ್ಟಕಡೆಗೆ ಅವನನ್ನು ಅವರ ಬಳಿಗೆ ಕಳುಹಿಸಿದನು.

21:38b.MAT.021.038 ಆದರೆ ಒಕ್ಕಲಿಗರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನಾಗಿದ್ದಾನೆ, ಬನ್ನಿರಿ; ನಾವು ಇವನನ್ನು ಕೊಂದು ಇವನ ಸ್ವಾಸ್ತ್ಯವನ್ನು ಸ್ವಾಧೀನಮಾಡಿಕೊ ಳ್ಳೋಣ ಎಂದು ಅಂದು ಕೊಂಡರು.

21:39b.MAT.021.039 ಅವರು ಅವನನ್ನು ಹಿಡಿದು ದ್ರಾಕ್ಷೇ ತೋಟದಿಂದ ಹೊರಗೆ ಹಾಕಿ ಅವನನ್ನು ಕೊಂದು ಹಾಕಿದರು.

21:40b.MAT.021.040 ಹೀಗಿರುವ ದರಿಂದ ದ್ರಾಕ್ಷೇ ತೋಟದ ಯಜಮಾನನು ಬಂದಾಗ ಆ ಒಕ್ಕಲಿಗರಿಗೆ ಏನು ಮಾಡಾನು ಅಂದನು.

21:41b.MAT.021.041 ಅವರು ಆತನಿಗೆ--ಅವನು ಆ ದುಷ್ಟ ಮನುಷ್ಯರನು ಕ್ರೂರವಾಗಿ ಸಂಹರಿಸುವನು; ಮತ್ತು ತಕ್ಕಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಒಕ್ಕಲಿಗರಿಗೆ ತನ್ನ ದ್ರಾಕ್ಷೇತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು.

21:42b.MAT.021.042 ಯೇಸು ಅವರಿಗೆ--ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಮತ್ತು ಇದು ಕರ್ತನಿಂದಲೇ ಆಯಿತು. ಅದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾದದ್ದು ಎಂದು ಬರಹಗಳಲ್ಲಿ ಎಂದಾದರೂ ನೀವು ಓದಲಿಲ್ಲವೋ?

21:43b.MAT.021.043 ಆದದರಿಂದ ನಾನು ನಿಮಗೆ ಹೇಳುವದೇನಂದರೆ--ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲ್ಪಡುವದು.

21:44b.MAT.021.044 ಈ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು; ಆದರೆ ಅದು ಯಾವನ ಮೇಲೆ ಬೀಳುವದೋ ಅವನನ್ನು ಅರೆದು ಪುಡಿಪುಡಿ ಮಾಡುವದು ಅಂದನು.

21:45b.MAT.021.045 ಪ್ರಧಾನ ಯಾಜಕರೂ ಫರಿಸಾಯರೂ ಆತನ ಸಾಮ್ಯಗಳನ್ನು ಕೇಳಿ ತಮ್ಮ ವಿಷಯದಲ್ಲಿಯೇ ಆತನು ಅದನ್ನು ಹೇಳಿದನೆಂದು ಅವರು ತಿಳುಕೊಂಡರು.ಆದರೆ ಅವರು ಆತನನ್ನು ಹಿಡಿಯುವದಕ್ಕೆ ಪ್ರಯತ್ನಿಸಿದಾಗ ಜನಸಮೂಹಕ್ಕೆ ಭಯಪಟ್ಟರು; ಯಾಕಂದರೆ ಅವರು ಆತನನ್ನು ಪ್ರವಾದಿಯೆಂದು ಎಣಿಸಿದ್ದರು.

21:46b.MAT.021.046 ಆದರೆ ಅವರು ಆತನನ್ನು ಹಿಡಿಯುವದಕ್ಕೆ ಪ್ರಯತ್ನಿಸಿದಾಗ ಜನಸಮೂಹಕ್ಕೆ ಭಯಪಟ್ಟರು; ಯಾಕಂದರೆ ಅವರು ಆತನನ್ನು ಪ್ರವಾದಿಯೆಂದು ಎಣಿಸಿದ್ದರು.

22

22:1b.MAT.022.001 ಯೇಸು ತಿರಿಗಿ ಸಾಮ್ಯ ರೂಪವಾಗಿ ಅವರ ಕೂಡ ಮಾತನಾಡುತ್ತಾ--

22:2b.MAT.022.002 ಪರಲೋಕ ರಾಜ್ಯವು ತನ್ನ ಮಗನ ಮದುವೆ ಮಾಡಿದ ಒಬ್ಬಾನೊಬ್ಬ ಅರಸನಿಗೆ ಹೋಲಿಕೆಯಾಗಿದೆ.

22:3b.MAT.022.003 ಅವನು ಮದುವೆಗೆ ಬರ ಹೇಳಿದವರನ್ನು ಕರೆಯು ವದಕ್ಕೆ ತನ್ನ ಸೇವಕರನ್ನು ಕಳುಹಿಸಿದನು; ಆದರೆ ಅವರು ಬರಲೊಲ್ಲದೆ ಇದ್ದರು.

22:4b.MAT.022.004 ಅವನು ತಿರಿಗಿ ಬೇರೆ ಸೇವಕರನ್ನು ಕಳುಹಿಸಿ ಅವರಿಗೆ--ಇಗೋ, ನಾನು ಔತಣವನ್ನು ಸಿದ್ಧಮಾಡಿದ್ದೇನೆ, ನನ್ನ ಎತ್ತುಗಳೂ ಕೊಬ್ಬಿದ ಪಶುಗಳೂ ಕೊಯ್ಯಲ್ಪಟ್ಟಿವೆ ಮತ್ತು ಎಲ್ಲವು ಗಳು ಸಿದ್ಧವಾಗಿವೆ; ಮದುವೆಗೆ ಬನ್ನಿರಿ ಎಂದು ಕರೆಯಲ್ಪಟ್ಟವರಿಗೆ ಹೇಳಿರಿ ಅಂದನು.

22:5b.MAT.022.005 ಕರೆಯಲ್ಪಟ್ಟವರು ಅದನ್ನು ಅಲಕ್ಷ್ಯಮಾಡಿ ಒಬ್ಬನು ತನ್ನ ಹೊಲಕ್ಕೂ ಇನ್ನೊಬ್ಬನು ತನ್ನ ವ್ಯಾಪಾರಕ್ಕೂ ಹೊರಟುಹೋದರು.

22:6b.MAT.022.006 ಉಳಿದವರು ಅವನ ಸೇವಕರನ್ನು ಹಿಡಿದು ಅವಮಾನ ಪಡಿಸಿ ಅವರನ್ನು ಕೊಂದುಹಾಕಿದರು.

22:7b.MAT.022.007 ಆದರೆ ಅರಸನು ಅದನ್ನು ಕೇಳಿ ಕೋಪೋದ್ರೇಕವುಳ್ಳವನಾಗಿ ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹ ರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.

22:8b.MAT.022.008 ತರುವಾಯ ಅವನು ತನ್ನ ಸೇವಕರಿಗೆ--ಮದುವೆಯು ಸಿದ್ಧವಾಗಿದೆ ಸರಿ, ಆದರೆ ಕರೆಯಲ್ಪಟ್ಟವರು ಯೋಗ್ಯರಾಗಿರಲಿಲ್ಲ.

22:9b.MAT.022.009 ಆದದರಿಂದ ನೀವು ಹೆದ್ದಾರಿಗಳಿಗೆ ಹೊರಟುಹೋಗಿ ಕಂಡವರನ್ನೆಲ್ಲಾ ಮದುವೆಗೆ ಕರೆಯಿರಿ ಅಂದನು.

22:10b.MAT.022.010 ಆಗ ಆ ಸೇವಕರು ಹೆದ್ದಾರಿಗಳಿಗೆ ಹೋಗಿ ತಾವು ಕಂಡವರ ನ್ನೆಲ್ಲಾ ಅಂದರೆ ಕೆಟ್ಟವರನ್ನೂ ಒಳ್ಳೆಯವರನ್ನೂ ಒಟ್ಟು ಗೂಡಿಸಿದರು; ಹೀಗೆ ಮದುವೆಗೆ ಅತಿಥಿಗಳು ತುಂಬಿ ಕೊಂಡರು.

22:11b.MAT.022.011 ತರುವಾಯ ಅರಸನು ಅತಿಥಿಗಳನ್ನು ನೋಡುವದಕ್ಕಾಗಿ ಒಳಗೆ ಬಂದು ಮದುವೆಯ ಉಡು ಪಿಲ್ಲದೆ ಇದ್ದ ಒಬ್ಬ ಮನುಷ್ಯನನ್ನು ಅಲ್ಲಿ ಕಂಡನು.

22:12b.MAT.022.012 ಅವನು ಆ ಮನುಷ್ಯನಿಗೆ--ಸ್ನೇಹಿತನೇ, ಮದುವೆಯ ಉಡುಪಿಲ್ಲದೆ ನೀನು ಒಳಗೆ ಹೇಗೆ ಬಂದಿ ಎಂದು ಕೇಳಲು ಅವನು ಸುಮ್ಮನಿದ್ದನು.

22:13b.MAT.022.013 ತರುವಾಯ ಅರಸನು ಸೇವಕರಿಗೆ--ಅವನ ಕೈ ಕಾಲುಗಳನ್ನು ಕಟ್ಟಿ ತಕ್ಕೊಂಡು ಹೋಗಿ ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು.

22:14b.MAT.022.014 ಯಾಕಂದರೆ ಕರೆಯಲ್ಪಟ್ಟವರು ಅನೇಕರು; ಆದರೆ ಆಯಲ್ಪಟ್ಟವರು ಸ್ವಲ್ಪ ಜನ ಅಂದನು.

22:15b.MAT.022.015 ಆಗ ಫರಿಸಾಯರು ಹೊರಟುಹೋಗಿ ಆತನನ್ನು ಮಾತಿನಲ್ಲಿ ಹೇಗೆ ಸಿಕ್ಕಿಸಬೇಕೆಂದು ಆಲೋಚನೆ ಮಾಡಿಕೊಂಡರು.

22:16b.MAT.022.016 ಮತ್ತು ತಮ್ಮ ಶಿಷ್ಯರನ್ನು ಹೆರೋದಿಯರೊಂದಿಗೆ ಆತನ ಬಳಿಗೆ ಕಳುಹಿಸಿ--ಬೋಧಕನೇ, ನೀನು ಸತ್ಯವಂತನು ಮತ್ತು ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುವಾತನು; ಇದಲ್ಲದೆ ನೀನು ಯಾರನ್ನೂ ಲಕ್ಷ್ಯಮಾಡುವಾತನಲ್ಲ; ಯಾಕಂದರೆ ನೀನು ಮುಖದಾಕ್ಷಿಣ್ಯ ಮಾಡುವದಿಲ್ಲ ಎಂದು

22:17b.MAT.022.017 ಆದದರಿಂದ-- ಕೈಸರನಿಗೆ ಕಪ್ಪವನ್ನು ಕೊಡುವದು ನ್ಯಾಯವೋ ನ್ಯಾಯವಲ್ಲವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು ಅಂದರು.

22:18b.MAT.022.018 ಯೇಸು ಅವರ ಕೆಟ್ಟತನವನ್ನು ತಿಳಿದು ಕೊಂಡವನಾಗಿ--ಕಪಟಿಗಳೇ, ನೀವು ನನ್ನನ್ನು ಯಾಕೆ ಶೋಧಿಸುತ್ತೀರಿ?

22:19b.MAT.022.019 ತೆರಿಗೆಯ ನಾಣ್ಯವನ್ನು ನನಗೆ ತೋರಿಸಿರಿ ಅಂದನು. ಆಗ ಅವರು ಒಂದು ಪಾವಲಿ ಯನ್ನು ತಂದುಕೊಟ್ಟರು.

22:20b.MAT.022.020 ಆತನು ಅವರಿಗೆ--ಈ ರೂಪವೂ ಮೇಲ್ಬರಹವೂ ಯಾರದು ಎಂದು ಕೇಳಿ ದನು.

22:21b.MAT.022.021 ಅದಕ್ಕೆ ಅವರು ಆತನಿಗೆ--ಕೈಸರನದು ಅಂದರು. ಆಗ ಆತನು ಅವರಿಗೆ-ಕೈಸರನದವುಗಳನ್ನು ಕೈಸರನಿಗೆ ಕೊಡಿರಿ; ದೇವರವುಗಳನ್ನು ದೇವರಿಗೆ ಕೊಡಿರಿ ಅಂದನು.

22:22b.MAT.022.022 ಇವುಗಳನ್ನು ಅವರು ಕೇಳಿದಾಗ ಆಶ್ಚರ್ಯಪಟ್ಟರು; ಮತ್ತು ಆತನನ್ನು ಬಿಟ್ಟು ಹೊರಟುಹೋದರು.

22:23b.MAT.022.023 ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಅದೇ ದಿನದಲ್ಲಿ ಆತನ ಬಳಿಗೆ ಬಂದು--

22:24b.MAT.022.024 ಬೋಧ ಕನೇ, ಒಬ್ಬ ಮನುಷ್ಯನು ಮಕ್ಕಳಿಲ್ಲದೆ ಸತ್ತರೆ ಅವನ ಸಹೋದರನು ಅವನ ಹೆಂಡತಿಯನ್ನು ಮದುವೆಯಾಗಿ ತನ್ನ ಸಹೋದರನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ.

22:25b.MAT.022.025 ಹೀಗಿರಲಾಗಿ ನಮ್ಮ ಕೂಡ ಏಳು ಮಂದಿ ಸಹೋದರರಿದ್ದರು; ಮೊದಲನೆ ಯವನು ಮದುವೆ ಮಾಡಿಕೊಂಡು ಸತ್ತನು; ಮತ್ತು ಸಂತಾನವಿಲ್ಲದ ಕಾರಣ ತನ್ನ ಹೆಂಡತಿಯನ್ನು ತನ್ನ ಸಹೋದರನಿಗೆ ಬಿಟ್ಟನು.

22:26b.MAT.022.026 ಅದರಂತೆಯೇ ಎರಡ ನೆಯವನು ಮತ್ತು ಮೂರನೆಯವನು ಹೀಗೆ ಏಳನೆಯ ವನವರೆಗೂ ಮಾಡಿದರು.

22:27b.MAT.022.027 ಕಡೆಯದಾಗಿ ಆ ಸ್ತ್ರೀಯೂ ಸತ್ತಳು.

22:28b.MAT.022.028 ಆದದರಿಂದ ಪುನರುತ್ಥಾನದಲ್ಲಿ ಆ ಏಳು ಮಂದಿಯಲ್ಲಿ ಆಕೆಯು ಯಾರಿಗೆ ಹೆಂಡತಿ ಯಾಗಿರುವಳು? ಯಾಕಂದರೆ ಅವರೆಲ್ಲರೂ ಆಕೆಯನ್ನು ಮದುವೆಮಾಡಿಕೊಂಡಿದ್ದರಲ್ಲಾ ಎಂದು ಕೇಳಿದರು.

22:29b.MAT.022.029 ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ಬರಹಗಳನ್ನಾಗಲೀ ದೇವರ ಶಕ್ತಿಯನ್ನಾಗಲೀ ತಿಳಿಯದೆ ತಪ್ಪುವವರಾಗಿದ್ದೀರಿ.

22:30b.MAT.022.030 ಯಾಕಂದರೆ ಪುನರುತ್ಥಾನದಲ್ಲಿ ಅವರು ಮದುವೆಯಾಗುವದಿಲ್ಲ ಮತ್ತು ಮದುವೆ ಮಾಡಿಕೊಡುವದೂ ಇಲ್ಲ; ಆದರೆ ಅವರು ಪರಲೋಕ ದಲ್ಲಿರುವ ದೇವದೂತರಂತೆ ಇರುತ್ತಾರೆ.

22:31b.MAT.022.031 ಆದರೆ ಸತ್ತವರ ಪುನರುತ್ಥಾನದ ವಿಷಯವಾಗಿ--

22:32b.MAT.022.032 ನಾನು ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು ಎಂದು ದೇವರು ನಿಮಗೆ ಹೇಳಿದ್ದನ್ನು ನೀವು ಓದಲಿಲ್ಲವೋ? ದೇವರು ಜೀವಿಸುವವರಿಗೇ ದೇವರಾಗಿದ್ದಾನೆ, ಸತ್ತವರಿಗಲ್ಲ ಎಂದು ಹೇಳಿದನು.

22:33b.MAT.022.033 ಜನ ಸಮೂಹದವರು ಇದನ್ನು ಕೇಳಿ ಆತನ ಬೋಧನೆಗೆ ವಿಸ್ಮಯಗೊಂಡರು.

22:34b.MAT.022.034 ಆದರೆ ಆತನು ಸದ್ದುಕಾಯರ ಬಾಯನ್ನು ಮುಚ್ಚಿದನೆಂದು ಫರಿಸಾಯರು ಕೇಳಿರಿ ಅಲ್ಲಿಗೆ ಕೂಡಿಬಂದರು.

22:35b.MAT.022.035 ಅವರಲ್ಲಿ ನ್ಯಾಯಶಾಸ್ತ್ರಿಯಾಗಿದ್ದ ಒಬ್ಬನು ಆತನನ್ನು ಶೋಧಿಸುವದಕ್ಕಾಗಿ--

22:36b.MAT.022.036 ಬೋಧಕ ನೇ, ನ್ಯಾಯ ಪ್ರಮಾಣದಲ್ಲಿ ದೊಡ್ಡ ಆಜ್ಞೆ ಯಾವದು ಎಂದು ಆತನನ್ನು ಪ್ರಶ್ನಿಸಿದನು.

22:37b.MAT.022.037 ಯೇಸು ಅವ ನಿಗೆ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣ ದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸಬೇಕು.

22:38b.MAT.022.038 ಈ ಆಜ್ಞೆಯು ಮೊದಲನೆಯದೂ ದೊಡ್ಡದೂ ಆಗಿದೆ. ಅದರಂತೆ--

22:39b.MAT.022.039 ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕೆಂಬದು ಎರಡನೆಯದು.

22:40b.MAT.022.040 ನ್ಯಾಯ ಪ್ರಮಾಣವೆಲ್ಲವೂ ಪ್ರವಾದನೆಗಳೂ ಈ ಎರಡು ಆಜ್ಞೆಗಳ ಮೇಲೆ ಆಧಾರಗೊಂಡಿವೆ ಅಂದನು.

22:41b.MAT.022.041 ಫರಿಸಾಯರು ಕೂಡಿ ಬಂದಿರುವಾಗ ಯೇಸು ಅವರಿಗೆ--

22:42b.MAT.022.042 ಕ್ರಿಸ್ತನ ವಿಷಯ ವಾಗಿ ನೀವು ಏನು ನೆನಸುತ್ತೀರಿ? ಆತನು ಯಾರ ಮಗನು ಎಂದು ಕೇಳಿದ್ದಕ್ಕೆ ಅವರು ಆತನಿಗೆ--ದಾವೀದನಕುಮಾರನು ಅಂದರು.

22:43b.MAT.022.043 ಆತನು ಅವ ರಿಗೆ--ಹಾಗಾದರೆ ದಾವೀದನು ಆತ್ಮದಲ್ಲಿ ಆತನಿಗೆ ಕರ್ತನೆಂದು ಕರೆದು--ಕರ್ತನು ನನ್ನ ಕರ್ತನಿಗೆ--

22:44b.MAT.022.044 ನಾನು ನಿನ್ನ ವಿರೋಧಿಗಳನ್ನು ಪಾದಪೀಠವಾಗಿ ಮಾಡುವ ವರೆಗೆ ನನ್ನ ಬಲಗಡೆಯಲ್ಲಿ ಕೂತು ಕೊಂಡಿರು ಎಂದು ಹೇಳಿದನಲ್ಲಾ.

22:45b.MAT.022.045 ದಾವೀದನು ಆತನನ್ನು ಕರ್ತನೆಂದು ಕರೆಯುವದಾದರೆ ಆತನು ದಾವೀದನ ಮಗನಾಗುವದು ಹೇಗೆ ಎಂದು ಕೇಳಿದನು.ಅದಕ್ಕೆ ಯಾರೂ ಒಂದು ಮಾತನ್ನು ಸಹ ಆತನಿಗೆ ಉತ್ತರ ಕೊಡಲಾರದೆ ಹೋದರು. ಇದಲ್ಲದೆ ಆ ದಿನದಿಂದ ಯಾವ ಪ್ರಶ್ನೆಗಳನ್ನಾದರೂ ಆತನನ್ನು ಕೇಳುವದಕ್ಕೆ ಯಾರಿಗೂ ಧೈರ್ಯಬರಲಿಲ್ಲ.

22:46b.MAT.022.046 ಅದಕ್ಕೆ ಯಾರೂ ಒಂದು ಮಾತನ್ನು ಸಹ ಆತನಿಗೆ ಉತ್ತರ ಕೊಡಲಾರದೆ ಹೋದರು. ಇದಲ್ಲದೆ ಆ ದಿನದಿಂದ ಯಾವ ಪ್ರಶ್ನೆಗಳನ್ನಾದರೂ ಆತನನ್ನು ಕೇಳುವದಕ್ಕೆ ಯಾರಿಗೂ ಧೈರ್ಯಬರಲಿಲ್ಲ.

23

23:1b.MAT.023.001 ತರುವಾಯ ಯೇಸು ಜನಸಮೂಹಕ್ಕೂ ಶಿಷ್ಯರಿಗೂ ಹೇಳಿದ್ದೇನಂದರೆ --

23:2b.MAT.023.002 ಶಾಸ್ತ್ರಿ ಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ ಕೂತಿ ದ್ದಾರೆ;

23:3b.MAT.023.003 ಆದದರಿಂದ ಅವರು ನಿಮಗೆ ಹೇಳುವವು ಗಳನ್ನೆಲ್ಲಾ ಕೈಕೊಂಡು ನಡೆಯಿರಿ; ಅವರ ಕ್ರಿಯೆಗಳ ಪ್ರಕಾರ ನೀವು ಮಾಡಬೇಡಿರಿ; ಯಾಕಂದರೆ ಅವರು ಹೇಳುತ್ತಾರೆ, ಮಾಡುವದಿಲ್ಲ.

23:4b.MAT.023.004 ಹೊರುವದಕ್ಕೆ ಅವರು ಭಾರವಾದ ಮತ್ತು ಕ್ರೂರವಾದ ಹೊರೆಗಳನ್ನು ಕಟ್ಟಿ ಜನರ ಹೆಗಲುಗಳ ಮೇಲೆ ಹೊರಿಸುತ್ತಾರೆ. ತಾವಾ ದರೋ ತಮ್ಮ ಬೆರಳುಗಳಲ್ಲಿ ಒಂದರಿಂದ ಲಾದರೂ ಅವುಗಳನ್ನು ಸರಿಸುವದಿಲ್ಲ.

23:5b.MAT.023.005 ಆದರೆ ತಾವು ಮಾಡುವ ತಮ್ಮ ಕ್ರಿಯೆಗಳನ್ನೆಲ್ಲಾ ಜನರು ನೋಡುವಂತೆ ಮಾಡು ತ್ತಾರೆ. ಅವರು ತಮ್ಮ ಜ್ಞಾಪಕಪಟ್ಟಿಗಳನ್ನು ಅಗಲಮಾಡಿ ಉಡುಪುಗಳ ಅಂಚುಗಳನ್ನು ಉದ್ದ ಮಾಡುತ್ತಾ

23:6b.MAT.023.006 ಔತಣಗಳಲ್ಲಿ ಪ್ರಥಮ ಸ್ಥಾನಗಳನ್ನೂ ಸಭಾಮಂದಿರ ಗಳಲ್ಲಿ ಮುಖ್ಯಸ್ಥಳಗಳನ್ನೂ

23:7b.MAT.023.007 ಸಂತೆಯ ಸ್ಥಳಗಳಲ್ಲಿ ವಂದನೆಗಳನ್ನೂ ಮತ್ತು ಜನರಿಂದ--ಬೋಧಕರೇ, ಬೋಧಕರೇ ಎಂದು ಕರೆಯಲ್ಪಡುವದನ್ನೂ ಅವರು ಪ್ರೀತಿಸುತ್ತಾರೆ.

23:8b.MAT.023.008 ಆದರೆ ನೀವು ಬೋಧಕರೆಂದು ಕರೆ ಯಲ್ಪಡಬೇಡಿರಿ. ಕ್ರಿಸ್ತನೊಬ್ಬನೇ ನಿಮ್ಮ ಬೋಧಕನು ಮತ್ತು ನೀವೆಲ್ಲರೂ ಸಹೋದರರು.

23:9b.MAT.023.009 ಭೂಮಿಯ ಮೇಲೆ ಯಾರನ್ನೂ ನಿಮ್ಮ ತಂದೆಯೆಂದು ಕರೆಯಬೇಡಿರಿ; ಪರಲೋಕದಲ್ಲಿರುವಾತನೊಬ್ಬನೇ ನಿಮ್ಮ ತಂದೆ.

23:10b.MAT.023.010 ನೀವು ಗುರುಗಳೆಂದು ಕರೆಯಲ್ಪಡಬೇಡಿರಿ; ಕ್ರಿಸ್ತ ನೊಬ್ಬನೇ ನಿಮ್ಮ ಗುರುವು.

23:11b.MAT.023.011 ಆದರೆ ನಿಮ್ಮಲ್ಲಿ ಅತಿ ದೊಡ್ಡವನಾಗಿರುವವನು ನಿಮ್ಮ ಸೇವಕನಾಗಿರಬೇಕು.

23:12b.MAT.023.012 ಯಾವನಾದರೂ ತನ್ನನ್ನು ಹೆಚ್ಚಿಸಿಕೊಂಡರೆ ಅವನು ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು.

23:13b.MAT.023.013 ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.

23:14b.MAT.023.014 ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ವಿಧವೆಯರ ಮನೆಗಳನ್ನು ನುಂಗುತ್ತೀರಿ; ಮತ್ತು ನಟನೆಗಾಗಿ ಉದ್ದವಾದ ಪ್ರಾರ್ಥನೆಯನ್ನು ಮಾಡುತ್ತೀರಿ; ಆದದರಿಂದ ನೀವು ಹೆಚ್ಚಾದ ದಂಡನೆಯನ್ನು ಹೊಂದುವಿರಿ.

23:15b.MAT.023.015 ಕಪಟಿಗಳಾದ ಫರಿಸಾಯರೇ, ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಒಬ್ಬನನ್ನು ಮತಾಂತರ ಮಾಡು ವದಕ್ಕೆ ನೀವು ಸಮುದ್ರವನ್ನೂ ಭೂಮಿಯನ್ನೂ ಸುತ್ತುತ್ತೀರಿ; ಮತಾಂತರ ಮಾಡಿದ ಮೇಲೆ ಅವನನ್ನು ನಿಮಗಿಂತಲೂ ಎರಡರಷ್ಟು ನರಕದ ಮಗನನ್ನಾಗಿ ಮಾಡುತ್ತೀರಿ.

23:16b.MAT.023.016 ಕುರುಡರಾದ ಮಾರ್ಗದರ್ಶಕರೇ, ನಿಮಗೆ ಅಯ್ಯೋ! ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲ ಅನ್ನುತ್ತೀರಿ; ಆದರೆ ಯಾವನಾದರೂ ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೆ ಅವನು ಸಾಲಗಾರನು ಎಂದು ಅನ್ನುತ್ತೀರಿ.

23:17b.MAT.023.017 ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಚಿನ್ನವೋ ಇಲ್ಲವೆ ಚಿನ್ನವನ್ನು ಪಾವನ ಮಾಡುವ ದೇವಾಲಯವೋ?

23:18b.MAT.023.018 ಯಾರಾದರೂ ಯಜ್ಞವೇದಿಯ ಮೇಲೆ ಆಣೆಯಿಡುವದಾದರೆ ಅದು ಏನೂ ಅಲ್ಲವೆಂದೂ ಯಾರಾದರೂ ಅದರಲ್ಲಿರುವ ಕಾಣಿಕೆಯ ಮೇಲೆ ಆಣೆಯಿಟ್ಟರೆ ಅವನು ಅಪರಾಧಿ ಯೆಂದೂ ಅನ್ನುತ್ತೀರಿ.

23:19b.MAT.023.019 ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಕಾಣಿಕೆಯೋ ಇಲ್ಲವೆ ಕಾಣಿಕೆಯನ್ನು ಪಾವನಮಾಡುವ ಯಜ್ಞವೇದಿಯೋ?

23:20b.MAT.023.020 ಆದದರಿಂದ ಯಜ್ಞವೇದಿಯ ಮೇಲೆ ಆಣೆಯಿಡು ವವನು ಅದರ ಮೇಲೆಯೂ ಅದರಲ್ಲಿರುವಂಥವುಗಳ ಮೇಲೆಯೂ ಆಣೆಯಿಡುವವನಾಗಿದ್ದಾನೆ.

23:21b.MAT.023.021 ದೇವಾ ಲಯದ ಮೇಲೆ ಆಣೆಯಿಡುವವನು ಅದರ ಮೇಲೆ ಯೂ ಆದರಲ್ಲಿ ವಾಸಿಸುವಾತನ ಮೇಲೆಯೂ ಆಣೆ ಯಿಡುವವನಾಗಿದ್ದಾನೆ.

23:22b.MAT.023.022 ಪರಲೋಕದ ಮೇಲೆ ಆಣೆ ಯಿಡುವವನು ದೇವರ ಸಿಂಹಾಸನದ ಮೇಲೆಯೂ ಅದರ ಮೇಲೆ ಕೂತಿರುವಾತನ ಮೇಲೆಯೂ ಆಣೆಯಿಡುವವನಾಗಿದ್ದಾನೆ.

23:23b.MAT.023.023 ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮರುಗ ಸೋಪು ಜೀರಿಗೆ ಗಳಲ್ಲಿ ದಶಮ ಭಾಗವನ್ನು ಸಲ್ಲಿಸುತ್ತೀರಿ. ಆದರೆ ನ್ಯಾಯ ಪ್ರಮಾಣದ ತೀರ್ಪು ಕರುಣೆ ನಂಬಿಕೆ ಎಂಬ ಈ ಪ್ರಾಮುಖ್ಯವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗ ಳೊಂದಿಗೆ ಆ ಬೇರೆಯವುಗಳನೂ

23:24b.MAT.023.024 ಕುರುಡ ಮಾರ್ಗದರ್ಶಕರಾದ ನೀವು ಸೊಳ್ಳೇ ಸೋಸುವವರು ಮತ್ತು ಒಂಟೇ ನುಂಗುವವರು.

23:25b.MAT.023.025 ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ. ಆದರೆ ಅವು ಒಳಗೆ ಸುಲಿಗೆಯಿಂದಲೂ ದುರಾಶೆಯಿಂದಲೂ ತುಂಬಿರುತ್ತವೆ.

23:26b.MAT.023.026 ಕುರುಡನಾದ ಫರಿಸಾಯನೇ, ಮೊದಲು ಪಾತ್ರೆಯ ಮತ್ತು ತಟ್ಟೆಯ ಒಳಗಿನ ಭಾಗ ವನ್ನು ಶುಚಿಮಾಡು; ಆಗ ಅವುಗಳ ಹೊರ ಭಾಗವೂ ಶುಚಿಯಾಗುವದು.

23:27b.MAT.023.027 ಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಸುಣ್ಣಾ ಹಚ್ಚಿದ ಸಮಾಧಿ ಗಳಿಗೆ ಹೋಲಿಕೆಯಾಗಿದ್ದೀರಿ. ಅವು ಹೊರಗೆ ನಿಜಕ್ಕೂ ಅಂದವಾಗಿ ಕಾಣುತ್ತವೆ; ಆದರೆ ಒಳಗೆ ಸತ್ತವರ ಎಲುಬು ಗಳಿಂದಲೂ ಎಲ್ಲಾ ಅಶುದ್ಧತೆಯಿಂದಲೂ ತುಂಬಿರು ತ್ತವೆ.

23:28b.MAT.023.028 ಅದರಂತೆಯೇ ನೀವು ಸಹ ಹೊರಗಡೆ ಮನುಷ್ಯರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ; ಆದರೆ ನೀವು ಒಳಗೆ ಕಪಟದಿಂದಲೂ ದುಷ್ಟತನ ದಿಂದಲೂ ತುಂಬಿದವರಾಗಿದ್ದೀರಿ.

23:29b.MAT.023.029 ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ ನೀತಿವಂತರ ಸಮಾಧಿಗಳನ್ನು ಅಲಂಕರಿಸುತ್ತೀರಿ.

23:30b.MAT.023.030 ಆದರೂ--ನಾವು ನಮ್ಮ ಪಿತೃಗಳ ದಿನಗಳಲ್ಲಿ ಇರುತ್ತಿದ್ದರೆ ಪ್ರವಾದಿಗಳ ರಕ್ತದಲ್ಲಿ ಅವರೊಂದಿಗೆ ಪಾಲುಗಾರರಾಗುತ್ತಿರಲಿಲ್ಲ ಎಂದು ಹೇಳುತ್ತೀರಿ.

23:31b.MAT.023.031 ಆದದರಿಂದ ನೀವು ಆ ಪ್ರವಾದಿ ಗಳನ್ನು ಕೊಂದವರ ಮಕ್ಕಳೇ ಎಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ.

23:32b.MAT.023.032 ಹಾಗಾದರೆ ನಿಮ ಪಿತೃಗಳ ಅಳತೆಯನ್ನು ನೀವೇ ತುಂಬಿಸಿರಿ.

23:33b.MAT.023.033 ಹಾವು ಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆ ಯಿಂದ ಹೇಗೆ ತಪ್ಪಿಸಿಕೊಂಡೀರಿ?

23:34b.MAT.023.034 ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ

23:35b.MAT.023.035 ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು.

23:36b.MAT.023.036 ನಿಮಗೆ ನಿಜವಾಗಿ ಹೇಳು ತ್ತೇನೆ--ಇವೆಲ್ಲವುಗಳು ಈ ಸಂತತಿಯವರ ಮೇಲೆ ಬರುವವು.

23:37b.MAT.023.037 ಓ ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸ ಲ್ಪಟ್ಟವರನ್ನು ಕಲ್ಲೆಸೆಯುವವಳೇ, ಕೋಳಿಯು ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಿನ್ನ ಮಕ್ಕಳನ್ನು ಕೂಡಿಸುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನ

23:38b.MAT.023.038 ಇಗೋ, ನಿಮ್ಮ ಮನೆಯು ನಿಮಗೆ ಹಾಳಾದದ್ದಾಗಿ ಬಿಡಲ್ಪಡುವದು.ಇಂದಿನಿಂದ ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ವರೆಗೆ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.

23:39b.MAT.023.039 ಇಂದಿನಿಂದ ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ವರೆಗೆ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.

24

24:1b.MAT.024.001 ತರುವಾಯ ಯೇಸು ದೇವಾಲಯದಿಂದ ಹೊರಟುಹೋದ ಮೇಲೆ ಆತನ ಶಿಷ್ಯರು ಆ ದೇವಾಲಯದ ಕಟ್ಟಡಗಳನ್ನು ತೋರಿಸುವದಕ್ಕಾಗಿ ಆತನ ಬಳಿಗೆ ಬಂದರು.

24:2b.MAT.024.002 ಆಗ ಯೇಸು ಅವರಿಗೆ--ಇವುಗಳನ್ನೆಲ್ಲಾ ನೀವು ನೋಡುತ್ತೀರಲ್ಲಾ. ಎಲ್ಲಾ ಕೆಡವ ಲ್ಪಡದು ಕಲ್ಲಿನ ಮೇಲೆ ಕಲ್ಲು ಒಂದು ಇಲ್ಲಿ ಬಿಡಲ್ಪ ಡುವದಿಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳು ತ್ತೇನೆ ಅಂದನು.

24:3b.MAT.024.003 ಆತನು ಎಣ್ಣೇಮರಗಳ ಗುಡ್ಡದ ಮೇಲೆ ಕೂತುಕೊಂಡಾಗ ಶಿಷ್ಯರು ಪ್ರತ್ಯೇಕವಾಗಿ ಆತನ ಬಳಿಗೆ ಬಂದು--ಇವು ಯಾವಾಗ ಆಗುವವು? ಮತ್ತು ನಿನ್ನ ಬರೋಣಕ್ಕೂ ಲೋಕವು ಅಂತ್ಯವಾಗುವದಕ್ಕೂ ಸೂಚನೆ ಏನು? ನಮಗೆ ಹೇಳು ಎಂದು ಕೇಳಿದರು.

24:4b.MAT.024.004 ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಯಾವನಾ ದರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆ ಯಿಂದಿರ್ರಿ.

24:5b.MAT.024.005 ಯಾಕಂದರೆ ನನ್ನ ಹೆಸರಿನಲ್ಲಿ ಅನೇಕರು ಬಂದು--ನಾನು ಕ್ರಿಸ್ತನು ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.

24:6b.MAT.024.006 ಯುದ್ಧಗಳನ್ನೂ ಯುದ್ಧಗಳ ಸುದ್ದಿಗಳನ್ನೂ ನೀವು ಕೇಳುವಿರಿ. ಕಳವಳಗೊಳ್ಳದಂತೆ ನೀವು ನೋಡಿಕೊಳ್ಳಿರಿ; ಯಾಕಂದರೆ ಇವೆಲ್ಲವುಗಳು ಸಂಭವಿಸುವದು ಅಗತ್ಯ; ಆದರೆ ಇದು ಇನ್ನೂ ಅಂತ್ಯವಲ್ಲ.

24:7b.MAT.024.007 ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಅಲ್ಲಲ್ಲಿ ಬರಗಳು, ಘೋರವ್ಯಾಧಿಗಳು ಮತ್ತು ಭೂಕಂಪಗಳು ಆಗುವವು.

24:8b.MAT.024.008 ಇವೆಲ್ಲವುಗಳು ಸಂಕಟಗಳ ಆರಂಭವು.

24:9b.MAT.024.009 ಆಗ ನಿಮ್ಮನ್ನು ಸಂಕಟಪಡಿ ಸುವದಕ್ಕಾಗಿ ಒಪ್ಪಿಸುವರು; ಮತ್ತು ನಿಮ್ಮನ್ನು ಕೊಲ್ಲು ವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗಗಳವರು ನಿಮ್ಮನ್ನು ಹಗೆ ಮಾಡುವರು.

24:10b.MAT.024.010 ಆಗ ಅನೇಕರು ಅಭ್ಯಂತರಪಟ್ಟು ಒಬ್ಬರನ್ನೊಬ್ಬರು ಹಿಡುಕೊಡುವರು ಮತ್ತು ಒಬ್ಬರನ್ನೊಬ್ಬರು ಹಗೆಮಾಡು ವರು.

24:11b.MAT.024.011 ಇದಲ್ಲದೆ ಬಹುಮಂದಿ ಸುಳ್ಳು ಪ್ರವಾದಿಗಳು ಎದ್ದು ಅನೇಕರನ್ನು ಮೋಸಗೊಳಿ ಸುವರು.

24:12b.MAT.024.012 ದುಷ್ಟತನ ಹೆಚ್ಚಾಗುವದರಿಂದ ಬಹಳ ಜನರ ಪ್ರೀತಿಯು ತಣ್ಣಗಾಗುವದು.

24:13b.MAT.024.013 ಆದರೆ ಕಡೇವರೆಗೆ ತಾಳುವವನೇ ರಕ್ಷಿಸಲ್ಪಡುವನು.

24:14b.MAT.024.014 ರಾಜ್ಯದ ಈ ಸುವಾರ್ತೆಯು ಲೋಕದಲ್ಲೆಲ್ಲಾ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವದು; ತರುವಾಯ ಅಂತ್ಯಬರುವದು.

24:15b.MAT.024.015 ಆದದರಿಂದ ಪ್ರವಾದಿಯಾದ ದಾನಿಯೇಲನಿಂದ ಹೇಳಲ್ಪಟ್ಟ ಹಾಳುಮಾಡುವ ಅಸಹ್ಯವು ಪರಿಶುದ್ಧ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದುವವನು ಗ್ರಹಿಸಲಿ)

24:16b.MAT.024.016 ಯೂದಾಯದಲ್ಲಿ ದ್ದವರು ಬೆಟ್ಟಗಳಿಗೆ ಓಡಿ ಹೋಗಲಿ;

24:17b.MAT.024.017 ಮಾಳಿಗೆಯ ಮೇಲಿರುವವನು ತನ್ನ ಮನೆಯೊಳಗಿಂದ ಏನಾದರೂ ತಕ್ಕೊಳ್ಳುವದಕ್ಕಾಗಿ ಕೆಳಗೆ ಇಳಿಯದಿರಲಿ;

24:18b.MAT.024.018 ಇಲ್ಲವೆ ಹೊಲದಲ್ಲಿರುವವನು ತನ್ನ ಬಟ್ಟೆಗಳನ್ನು ತಕ್ಕೊಳ್ಳುವ ದಕ್ಕಾಗಿ ಹಿಂತಿರುಗದೆ ಇರಲಿ.

24:19b.MAT.024.019 ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆಕುಡಿಸುವ ಕೂಸುಗಳಿದ್ದ ವರಿಗೂ ಅಯ್ಯೋ!

24:20b.MAT.024.020 ಆದರೆ ನಿಮ್ಮ ಪಲಾಯನವು ಚಳಿಗಾಲದಲ್ಲಾಗಲೀ ಸಬ್ಬತ್ತಿನ ದಿನದಲ್ಲಾಗಲೀ ಆಗದಂತೆ ಪ್ರಾರ್ಥಿಸಿರಿ.

24:21b.MAT.024.021 ಅಂಥ ಮಹಾ ಸಂಕಟವು ಲೋಕಾದಿಯಿಂದ ಇಂದಿನವರೆಗೂ ಆಗಲಿಲ್ಲ, ಆಮೇಲೆ ಎಂದಿಗೂ ಆಗುವದಿಲ್ಲ.

24:22b.MAT.024.022 ಆ ದಿವಸಗಳು ಕಡಿಮೆ ಮಾಡಲ್ಪಡದಿದ್ದರೆ ಯಾವನೂ ಉಳಿಯು ವದಿಲ್ಲ; ಆದರೆ ಆಯಲ್ಪಟ್ಟವರಿಗಾಗಿ ಆ ದಿವಸಗಳು ಕಡಿಮೆ ಮಾಡಲ್ಪಡುವವು.

24:23b.MAT.024.023 ಆಗ ಯಾರಾದರೂ ನಿಮಗೆ--ಇಗೋ, ಕ್ರಿಸ್ತನು ಇಲ್ಲಿದ್ದಾನೆ ಇಲ್ಲವೆ ಅಲ್ಲಿದ್ದಾನೆ ಎಂದು ಹೇಳಿದರೆ ಅದನ್ನು ನಂಬಬೇಡಿರಿ.

24:24b.MAT.024.024 ಯಾಕಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯಲ್ಪಟ್ಟವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕ ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸು ವರು.

24:25b.MAT.024.025 ಇಗೋ, ಮುಂದಾಗಿ ನಾನು ನಿಮಗೆ ಹೇಳಿದ್ದೇನೆ.

24:26b.MAT.024.026 ಆದಕಾರಣ ಅವರು ನಿಮಗೆ--ಇಗೋ, ಆತನು ಅಡವಿಯಲ್ಲಿದ್ದಾನೆಂದು ಹೇಳಿದರೆ ಹೋಗಬೇಡಿರಿ; ಇಗೋ, ಆತನು ಗುಪ್ತವಾದ ಕೋಣೆಗಳಲ್ಲಿದ್ದಾನೆಂದು ಹೇಳಿದರೆ ಅದನ್ನು ನಂಬ ಬೇಡಿರಿ.

24:27b.MAT.024.027 ಯಾಕಂದರೆ ಮಿಂಚು ಪೂರ್ವದಿಂದ ಹೊರಟು ಬಂದು ಪಶ್ಚಿಮದವರೆಗೆ ಹೊಳೆಯು ವಂತೆಯೇ ಮನುಷ್ಯಕುಮಾರನ ಬರೋಣವೂ ಇರು ವದು.

24:28b.MAT.024.028 ಯಾಕಂದರೆ ಹೆಣ ಇದ್ದಲ್ಲಿ ಹದ್ದುಗಳು ಕೂಡಿಕೊಳ್ಳುವವು.

24:29b.MAT.024.029 ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕು ಕೊಡದೆ ಇರುವನು; ನಕ್ಷತ್ರಗಳು ಆಕಾಶದಿಂದ ಬೀಳುವವು ಆಕಾಶದ ಶಕ್ತಿಗಳು ಕದಲಿಸಲ್ಪಡುವವು.

24:30b.MAT.024.030 ಆಗ ಮನುಷ್ಯಕುಮಾರನ ಸೂಚನೆಯು ಆಕಾಶದಲ್ಲಿ ಕಾಣುವದು; ಭೂಮಿಯ ಎಲ್ಲಾ ಗೋತ್ರದವರು ಗೋಳಾಡುವರು. ಮತ್ತು ಮನುಷ್ಯಕುಮಾರನು ಆಕಾಶದ ಮೇಘಗಳಲ್ಲಿ ಶಕ್ತಿಯೊಡನೆಯೂ ಮಹಾ ಪ್ರಭಾವದೊಂದಿಗೂ ಬರುವದನ್ನು ಅವರು ನೋಡು ವರು.

24:31b.MAT.024.031 ತರುವಾಯ ಆತನು ತನ್ನ ದೂತರನ್ನು ತುತೂರಿಯ ಮಹಾಶಬ್ದದೊಂದಿಗೆ ಕಳುಹಿಸುವನು; ಆಗ ಅವರು ಆತನಿಂದ ಆಯಲ್ಪಟ್ಟವರನ್ನು ನಾಲ್ಕು ದಿಕ್ಕುಗಳಿಂದ ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಒಟ್ಟುಗೂಡಿಸುವರು.

24:32b.MAT.024.032 ಈಗ ಅಂಜೂರ ಮರದ ಸಾಮ್ಯದಿಂದ ಕಲಿ ಯಿರಿ; ಆದರ ಕೊಂಬೆಯು ಇನ್ನೂ ಎಳೆಯದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿ ತೆಂದು ನೀವು ತಿಳಿದುಕೊಳ್ಳುವಿರಿ;

24:33b.MAT.024.033 ಅದರಂತೆಯೇ ನೀವು ಇವುಗಳನ್ನೆಲ್ಲಾ ನೋಡುವಾಗ ಅದು ಸವಿಾಪ ದಲ್ಲಿ ಬಾಗಲುಗಳಲ್ಲಿಯೇ ಇದೆಯೆಂದು ತಿಳು ಕೊಳ್ಳಿರಿ.

24:34b.MAT.024.034 ಇವೆಲ್ಲವುಗಳು ನೇರವೇರುವ ವರೆಗೆ ಈ ಸಂತತಿಯು ಅಳಿದುಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.

24:35b.MAT.024.035 ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.

24:36b.MAT.024.036 ಆದರೆ ಆ ದಿನವಾಗಲೀ ಗಳಿಗೆಯಾಗಲೀ ನನ್ನ ತಂದೆಗೆ ಮಾತ್ರವೇ ಹೊರತು ಮತ್ತಾರಿಗೂ ಪರಲೋಕದ ದೂತರಿಗೂ ತಿಳಿಯದು.

24:37b.MAT.024.037 ಆದರೆ ನೋಹನ ದಿವಸಗಳು ಇದ್ದಂತೆಯೇ ಮನುಷ್ಯ ಕುಮಾರನ ಬರೋಣವೂ ಇರುವದು.

24:38b.MAT.024.038 ನೋಹನು ನಾವೆಯಲ್ಲಿ ಸೇರಿದ ದಿವಸದ ವರೆಗೆ ಪ್ರಳಯವು ಬರುವದಕ್ಕಿಂತ ಮುಂಚಿನ ಆ ದಿವಸಗಳಲ್ಲಿ ಜನರು ತಿನ್ನುತ್ತಾ ಕುಡಿಯುತ್ತಾ ಮದುವೆ ಮಾಡಿಕೊಳ್ಳುತ್ತಾ ಮದುವೆ ಮಾಡಿಕೊಡುತ್ತಾ ಇದ್ದರು.

24:39b.MAT.024.039 ಪ್ರಳಯವು ಬಂದು ಅವರನ್ನು ಬಡುಕೊಂಡು ಹೊಗುವವರೆಗೂ ಅವರಿಗೆ ತಿಳಿದಿರಲಿಲ್ಲ; ಹಾಗೆಯೇ ಮನುಷ್ಯ ಕುಮಾರನ ಬರೋಣವೂ ಇರುವದು.

24:40b.MAT.024.040 ಆಗ ಇಬ್ಬರು ಹೊಲದಲ್ಲಿರುವರು; ಒಬ್ಬನು ತೆಗೆಯಲ್ಪಡು ವನು; ಮತ್ತೊಬ್ಬನು ಬಿಡಲ್ಪಡುವನು.

24:41b.MAT.024.041 ಇಬ್ಬರು ಸ್ತ್ರೀಯರು ಬೀಸುತ್ತಿರುವಾಗ ಒಬ್ಬಳು ತೆಗೆಯಲ್ಪಡು ವಳು, ಮತ್ತೊಬ್ಬಳು ಬಿಡಲ್ಪಡುವಳು.

24:42b.MAT.024.042 ನಿಮ್ಮ ಕರ್ತನು ಯಾವ ಗಳಿಗೆಯಲ್ಲಿ ಬರು ತ್ತಾನೋ ನಿಮಗೆ ಗೊತ್ತಿಲ್ಲವಾದದರಿಂದ ಎಚ್ಚರ ವಾಗಿರ್ರಿ.

24:43b.MAT.024.043 ಕಳ್ಳನು ಯಾವ ಗಳಿಗೆಯಲ್ಲಿ ಬರುತ್ತಾ ನೆಂದು ಮನೇ ಯಜಮಾನನು ತಿಳಿದಿದ್ದರೆ ಅವನು ತನ್ನ ಮನೆಯು ಕನ್ನಾಕೊರೆಯದಂತೆ ಕಾಯುತ್ತಿದ್ದ ನೆಂದು ನೀವು ತಿಳಿದುಕೊಳ್ಳಿರಿ.

24:44b.MAT.024.044 ಆದಕಾರಣ ನೀವು ಸಹ ಸಿದ್ಧವಾಗಿರ್ರಿ; ಯಾಕಂದರೆ ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ.

24:45b.MAT.024.045 ಹಾಗಾದರೆ ತನ್ನ ಮನೆಯಲ್ಲಿದ್ದವರಿಗೆ ತಕ್ಕ ಕಾಲ ದಲ್ಲಿ ಆಹಾರ ಕೊಡುವಂತೆ ಅವರ ಮೇಲೆ ತನ್ನ ಯಜಮಾನನು ನೇಮಿಸಿದ ಅಧಿಕಾರಿಯೂ ನಂಬಿಗಸ್ತನೂ ಜ್ಞಾನಿಯೂ ಆದ ಸೇವಕನು ಯಾರು?

24:46b.MAT.024.046 ಯಜಮಾನನು ಬಂದು ಯಾವ ಸೇವಕನು ಹಾಗೆ ಮಾಡುವದನ್ನು ನೋಡುವನೋ ಆ ಸೇವಕನೇ ಧನ್ಯನು.

24:47b.MAT.024.047 ಅವನನ್ನು ಆತನು ತನ್ನ ಎಲ್ಲಾ ಆಸ್ತಿಯ ಮೇಲೆ ನೇಮಿಸುವನೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.

24:48b.MAT.024.048 ಆದರೆ ಆ ಕೆಟ್ಟ ಸೇವಕನು ತನ್ನ ಹೃದಯದಲ್ಲಿ--ನನ್ನ ಯಜಮಾನನು ಬರುವದಕ್ಕೆ ತಡಮಾಡುತ್ತಾನೆ ಎಂದು ಅಂದುಕೊಂಡು

24:49b.MAT.024.049 ತನ್ನ ಜೊತೇ ಸೇವಕರನ್ನು ಹೊಡೆಯುತ್ತಾ ಕುಡುಕರ ಸಂಗಡ ತಿನ್ನುವದಕ್ಕೂ ಕುಡಿಯುವದಕ್ಕೂ ಪ್ರಾರಂಭಿಸು ವದಾದರೆ

24:50b.MAT.024.050 ಅವನು ನಿರೀಕ್ಷಿಸದೆ ಇರುವ ದಿನದಲ್ಲಿ ಇಲ್ಲವೆ ನೆನಸದ ಗಳಿಗೆಯಲ್ಲಿ ಆ ಸೇವಕನ ಯಜಮಾ ನನು ಬಂದುಅವನನ್ನು ಛೇದಿಸಿ ಕಪಟಿಗಳೊಂದಿಗೆ ಅವನ ಪಾಲನ್ನು ನೇಮಿಸುವನು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.

24:51b.MAT.024.051 ಅವನನ್ನು ಛೇದಿಸಿ ಕಪಟಿಗಳೊಂದಿಗೆ ಅವನ ಪಾಲನ್ನು ನೇಮಿಸುವನು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.

25

25:1b.MAT.025.001 ಇದಲ್ಲದೆ ಪರಲೋಕ ರಾಜ್ಯವು ತಮ್ಮ ದೀಪಗಳನ್ನು ತಕ್ಕೊಂಡು ಮದಲಿಂಗ ನನ್ನು ಎದುರುಗೊಳ್ಳುವದಕ್ಕಾಗಿ ಹೊರಟುಹೋದ ಹತ್ತುಮಂದಿ ಕನ್ಯೆಯರಿಗೆ ಹೋಲಿಕೆಯಾಗಿರುವದು.

25:2b.MAT.025.002 ಅವರಲ್ಲಿ ಐದುಮಂದಿ ಬುದ್ಧಿವಂತೆಯರೂ ಐದು ಮಂದಿ ಬುದ್ಧಿಹೀನರೂ ಇದ್ದರು.

25:3b.MAT.025.003 ಬುದ್ಧಿಹೀನರು ತಮ್ಮ ದೀಪಗಳನ್ನು ತಕ್ಕೊಂಡು ತಮ್ಮೊಂದಿಗೆ ಎಣ್ಣೆಯನ್ನು ತಕ್ಕೊಳ್ಳಲಿಲ್ಲ,

25:4b.MAT.025.004 ಬುದ್ದಿವಂತೆಯರು ತಮ್ಮ ದೀಪಗಳೊ ಂದಿಗೆ ಪಾತ್ರೆಯಲ್ಲಿ ಎಣ್ಣೆಯನ್ನೂ ತಕ್ಕೊಂಡರು.

25:5b.MAT.025.005 ಮದಲಿಂಗನು ತಡಮಾಡಿದಾಗ ಅವರೆಲ್ಲರೂ ತೂಕಡಿಸಿ ನಿದ್ರಿಸಿದರು.

25:6b.MAT.025.006 ಮಧ್ಯರಾತ್ರಿಯಲ್ಲಿ--ಇಗೋ, ಮದಲಿಂಗನು ಬರುತ್ತಾನೆ; ಅವನನ್ನು ಎದುರುಗೊಳ್ಳುವದಕ್ಕಾಗಿ ಹೊರಡಿರಿ ಎಂಬ ಕೂಗಾ ಯಿತು.

25:7b.MAT.025.007 ಆಗ ಆ ಕನ್ಯೆಯರೆಲ್ಲರೂ ಎದ್ದು ತಮ್ಮ ದೀಪಗಳನ್ನು ಸರಿಪಡಿಸಿಕೊಂಡರು;

25:8b.MAT.025.008 ಬುದ್ಧಿಹೀನರು ಬುದ್ಧಿವಂತೆಯರಿಗೆ-- ನಿಮ್ಮ ಎಣ್ಣೆಯಲ್ಲಿ ನಮಗೆ ಕೊಡಿರಿ; ಯಾಕಂದರೆ ನಮ್ಮ ದೀಪಗಳು ಆರಿಹೋಗಿವೆ ಅಂದರು.

25:9b.MAT.025.009 ಆದರೆ ಬುದ್ಧಿವಂತೆಯರು ಪ್ರತ್ಯುತ್ತರ ವಾಗಿ--ಹಾಗಲ್ಲ, ಅದು ನಮಗೂ ನಿಮಗೂ ಸಾಲದೆ ಹೋದೀತು; ಆದದರಿಂದ ನೀವು ಮಾರು ವವರ ಬಳಿಗೆ ಹೋಗಿ ನಿಮಗೋಸ್ಕರ ಕೊಂಡು ಕೊಳ್ಳಿರಿ ಅಂದರು.

25:10b.MAT.025.010 ಅವರು ಕೊಂಡುಕೊಳ್ಳುವದಕ್ಕೆ ಹೋದಾಗ ಮದಲಿಂಗನು ಬಂದನು. ಆಗ ಸಿದ್ಧವಾಗಿ ದ್ದವರು ಮದುವೆಗೆ ಆತನೊಂದಿಗೆ ಒಳಕ್ಕೆ ಹೊದರು; ತರುವಾಯ ಬಾಗಲು ಮುಚ್ಚಲಾಯಿತು.

25:11b.MAT.025.011 ಇದಾದ ಮೇಲೆ ಆ ಬೇರೆ ಕನ್ಯೆಯರು ಸಹ ಬಂದು--ಕರ್ತನೇ, ಕರ್ತನೇ, ನಮಗೆ ಬಾಗಲನ್ನು ತೆರೆ ಅಂದರು.

25:12b.MAT.025.012 ಆದರೆ ಅವನು ಪ್ರತ್ಯುತ್ತರವಾಗಿ--ನಿಮ್ಮನ್ನು ಅರಿ ಯೆನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.

25:13b.MAT.025.013 ಆದದರಿಂದ ಎಚ್ಚರವಾಗಿರ್ರಿ; ಯಾಕಂದರೆ ಮನುಷ್ಯಕುಮಾರನು ಬರುವ ದಿನ ವನ್ನಾಗಲೀ ಗಳಿಗೆಯನ್ನಾಗಲೀ ನೀವು ಅರಿಯದವರಾ ಗಿದ್ದೀರಿ ಅಂದನು.

25:14b.MAT.025.014 ಯಾಕಂದರೆ ಪರಲೋಕರಾಜ್ಯವು ದೂರ ದೇಶಕ್ಕೆ ಪ್ರಯಾಣಮಾಡುವ ಒಬ್ಬ ಮನುಷ್ಯನು ತನ್ನ ಸ್ವಂತ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿದಂತೆ ಇದೆ.

25:15b.MAT.025.015 ಅವನು ಒಬ್ಬನಿಗೆ ಐದು ತಲಾಂತುಗಳನ್ನು ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ಕೊಟ್ಟು ತಕ್ಷಣವೇ ಪ್ರಯಾಣ ಮಾಡಿದನು.

25:16b.MAT.025.016 ತರುವಾಯ ಐದು ತಲಾಂತುಗಳನ್ನು ಹೊಂದಿದ ವನು ಹೋಗಿ ಅವುಗಳಿಂದ ವ್ಯಾಪಾರಮಾಡಿ ಬೇರೆ ಐದು ತಲಾಂತುಗಳನ್ನು ಸಂಪಾದಿಸಿದನು.

25:17b.MAT.025.017 ಅದೇ ಪ್ರಕಾರ ಎರಡು ಹೊಂದಿದವನು ಸಹ ಬೇರೆ ಎರಡನ್ನು ಸಂಪಾದಿಸಿದನು.

25:18b.MAT.025.018 ಆದರೆ ಒಂದು ತಲಾಂತು ಹೊಂದಿದವನು ಹೋಗಿ ಭೂಮಿಯನ್ನು ಅಗೆದು ತನ್ನ ಯಜಮಾನನ ಹಣವನ್ನು ಬಚ್ಚಿಟ್ಟನು.

25:19b.MAT.025.019 ಬಹುಕಾಲವಾದ ಮೇಲೆ ಆ ಸೇವಕರ ಯಜ ಮಾನನು ಬಂದು ಅವರಿಂದ ಲೆಕ್ಕಾ ತೆಗೆದುಕೊಂಡನು.

25:20b.MAT.025.020 ಆಗ ಐದು ತಲಾಂತುಗಳನ್ನು ಹೊಂದಿದ್ದವನು ಬಂದು ಬೇರೆ ಐದು ತಲಾಂತುಗಳನ್ನು ತಂದು--ಒಡೆಯನೇ, ನೀನು ನನಗೆ ಐದು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಬೇರೆ ಐದು ತಲಾಂತುಗಳನ್ನು ನಾನು ಸಂಪಾದಿಸಿದ್ದೇನೆ ಅಂದನು.

25:21b.MAT.025.021 ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇದನ್ನು ಮಾಡಿದ್ದೀ. ಸ್ವಲ್ಪವಾದವುಗಳಲ್ಲಿ ನೀನು ನಂಬಿಗಸ್ತ ನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.

25:22b.MAT.025.022 ಎರಡು ತಲಾಂತುಗಳನ್ನು ಹೊಂದಿದ್ದವನು ಸಹ ಬಂದು--ಒಡೆಯನೇ, ನೀನು ನನಗೆ ಎರಡು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಇನ್ನೂ ಎರಡು ತಲಾಂತುಗಳನ್ನು ನಾನು ಸಂಪಾದಿಸಿ ದ್ದೇನೆ ಅಂದನು.

25:23b.MAT.025.023 ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇ ದನ್ನು ಮಾಡಿದ್ದೀ; ಸ್ವಲ್ಪವಾದವುಗಳಲ್ಲಿ ನೀನು ನಂಬಿಗ ಸ್ತನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.

25:24b.MAT.025.024 ಆಗ ಒಂದು ತಲಾಂತು ಹೊಂದಿದ್ದ ವನು ಬಂದು--ಒಡೆಯನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನೂ ತೂರದಿರುವಲ್ಲಿ ಕೂಡಿಸುವವನೂ ಆಗಿರುವ ಕಠಿಣ ಮನುಷ್ಯನೆಂದು ನಾನು ಬಲ್ಲೆನು;

25:25b.MAT.025.025 ಅದಕ್ಕೆ ನಾನು ಭಯಪಟ್ಟು ಹೋಗಿ ನಿನ್ನ ತಲಾಂತನ್ನು ಭೂಮಿಯಲ್ಲಿ ಬಚ್ಚಿಟ್ಟೆನು. ಇಗೋ, ನಿನ್ನದು ನಿನಗೆ ಸಲ್ಲಿದೆ ಅಂದನು.

25:26b.MAT.025.026 ಅದಕ್ಕೆ ಅವನ ಯಜ ಮಾನನು ಪ್ರತ್ಯುತ್ತರವಾಗಿ--ಮೈಗಳ್ಳನಾದ ಕೆಟ್ಟ ಸೇವಕನೇ, ನಾನು ಬಿತ್ತದಿರುವಲ್ಲಿ ಕೊಯ್ಯುವವನೆ ಂತಲೂ ತೂರದಿರುವಲ್ಲಿ ಕೂಡಿಸುವವನೆಂತಲೂ ನೀನು ತಿಳಿದಿದ್ದೀಯಲ್ಲಾ.

25:27b.MAT.025.027 ಹಾಗಾದರೆ ನೀನು ನನ್ನ ಹಣವನ್ನು ಬಡ್ಡಿಗಾಗಿ ಕೊಡತಕ್ಕದ್ದಾಗಿತ್ತು; ನಾನು ಬಂದಾಗ ನನ್ನ ಸ್ವಂತದ್ದನ್ನು ಬಡ್ಡಿ ಸಹಿತವಾಗಿ ಹೊಂದಿ ಕೊಳ್ಳುತ್ತಿದ್ದೆನು.

25:28b.MAT.025.028 ಆ ತಲಾಂತನ್ನು ತೆಗೆದುಕೊಂಡು ಹತ್ತು ತಲಾಂತುಗಳುಳ್ಳವನಿಗೆ ಕೊಡಿರಿ.

25:29b.MAT.025.029 ಇದ್ದ ಪ್ರತಿ ಯೊಬ್ಬನಿಗೆ ಕೊಡಲ್ಪಡುವದು ಮತ್ತು ಅವನಿಗೆ ಸಮೃದ್ಧಿ ಯಾಗುವದು; ಇಲ್ಲದವನ ಕಡೆಯಿಂದ ಅವನಿಗೆ ಇದ್ದದ್ದೂ ತೆಗೆಯಲ್ಪಡುವದು.

25:30b.MAT.025.030 ಮತ್ತು ನಿಷ್ಪ್ರಯೋ ಜಕನಾದ ಈ ಸೇವಕನನ್ನು ನೀವು ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು ಅಂದನು.

25:31b.MAT.025.031 ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು;

25:32b.MAT.025.032 ಮತ್ತು ಆತನ ಮುಂದೆ ಎಲ್ಲಾ ಜನಾಂಗಗಳವರು ಕೂಡಿಸಲ್ಪ ಡುವರು; ಆಗ ಕುರುಬನು ತನ್ನ ಕುರಿಗಳನ್ನು ಆಡುಗ ಳಿಂದ ಪ್ರತ್ಯೇಕಿಸುವಂತೆಯೇ ಆತನು ಅವರನ್ನು ಪ್ರತ್ಯೇ ಕಿಸುವನು;

25:33b.MAT.025.033 ಆತನು ಕುರಿಗಳನ್ನು ತನ್ನ ಬಲಗಡೆ ಯಲ್ಲಿಯೂ ಆಡುಗಳನ್ನು ತನ್ನ ಎಡಗಡೆಯಲ್ಲಿಯೂ ನಿಲ್ಲಿಸುವನು.

25:34b.MAT.025.034 ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;

25:35b.MAT.025.035 ಯಾಕಂದರೆ ನಾನು ಹಸಿದಿದ್ದೆನು, ನೀವು ನನಗೆ ಊಟವನ್ನು ಕೊಟ್ಟಿರಿ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವದಕ್ಕೆ ಕೊಟ್ಟಿರಿ; ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಕ್ಕೆ ಸೇರಿಸಿಕೊಂಡಿರಿ;

25:36b.MAT.025.036 ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡಿಸಿ ದಿರಿ; ನಾನು ಅಸ್ವಸ್ಥನಾಗಿದ್ದೆನು; ನೀವು ನನ್ನನ್ನು ಸಂಧಿಸಿ ದಿರಿ; ನಾನು ಸೆರೆಯಲ್ಲಿದ್ದೆನು, ನೀವು ನನ್ನ ಬಳಿಗೆ ಬಂದಿರಿ ಎಂದು ಹೇಳುವನು.

25:37b.MAT.025.037 ಆಗ ಆ ನೀತಿವಂತರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಯಾವಾಗ ನೀನು ಹಸಿದದ್ದನ್ನು ನೋಡಿ ನಾವು ನಿನಗೆ ಉಣಿಸಿ ದೆವು? ಇಲ್ಲವೆ ಬಾಯಾರಿದ್ದಾಗ ನಿನಗೆ ಕುಡಿಯುವದಕ್ಕೆ ಕೊಟ್ಟೆವು? ಯಾವಾಗ

25:38b.MAT.025.038 ನೀನು ಪರದೇಶಿಯಾ ಗಿರುವದನ್ನು ನಾವು ನೋಡಿ ನಿನ್ನನ್ನು ಒಳಕ್ಕೆ ಸೇರಿಸಿ ಕೊಂಡೆವು? ಇಲ್ಲವೆ ಬಟ್ಟೆಯಿಲ್ಲದಿರುವಾಗ ನಿನಗೆ ಉಡಿಸಿದೆವು?

25:39b.MAT.025.039 ಯಾವಾಗ ನೀನು ಅಸ್ವಸ್ಥನಾಗಿ ಇಲ್ಲವೆ ಸೆರೆಯಲ್ಲಿದ್ದಾಗ ನಾವು ನಿನ್ನನ್ನು ನೋಡಿ ನಿನ್ನ ಬಳಿಗೆ ಬಂದೆವು ಎಂದು ಹೇಳುವರು.

25:40b.MAT.025.040 ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು.

25:41b.MAT.025.041 ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.

25:42b.MAT.025.042 ನಾನು ಹಸಿದವನಾಗಿದ್ದೆನು, ನೀವು ನನಗೆ ಊಟಕ್ಕೆ ಕೊಡಲಿಲ್ಲ; ನಾನು ಬಾಯಾರಿದವನಾಗಿದ್ದೆನು, ನೀವು ನನಗೆ ಕುಡಿ ಯುವದಕ್ಕೆ ಕೊಡಲಿಲ್ಲ.

25:43b.MAT.025.043 ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಗೆ ಸೇರಿಸಿಕೊಳ್ಳಲಿಲ್ಲ; ಬಟ್ಟೆಯಿಲ್ಲದವನಾಗಿದ್ದಾಗ ನೀವು ನನಗೆ ಉಡಿಸಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಸಂಧಿಸಲಿಲ್ಲ ಎಂದು ಹೇಳುವನು.

25:44b.MAT.025.044 ಆಗ ಅವರು ಸಹ ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನೀನು ಯಾವಾಗ ಹಸಿದದ್ದನ್ನೂ ಬಾಯರಿದ್ದನ್ನೂ ಪರದೇಶಿ ಯಾದದ್ದನ್ನೂ ಬಟ್ಟೆಯಿಲ್ಲದವನಾಗಿದ್ದದ್ದನ್ನೂ ಅಸ್ವಸ್ಥ ನಾಗಿದ್ದದ್ದನ್ನೂ ಸೆರೆಯಲ್ಲಿದ್ದದ್ದನ್ನೂ ನಾವು ನೋಡಿ ನಿನಗೆ ಉಪಚಾರ ಮಾಡಲಿಲ್ಲ ಎಂದು ಹೇಳುವರು.

25:45b.MAT.025.045 ಆಗ ಆತನು ಅವರಿಗೆ ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುವದೇನಂದರೆ, ನೀವು ಇವ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡದೆ ಹೋದ ದರಿಂದ ನನಗೂ ಮಾಡಲಿಲ್ಲ ಎಂದು ಹೇಳುವನು.ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.

25:46b.MAT.025.046 ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.

26

26:1b.MAT.026.001 ಯೇಸು ಈ ಮಾತುಗಳನ್ನೆಲ್ಲಾ ಹೇಳಿ ಮುಗಿಸಿದ ನಂತರ ತನ್ನ ಶಿಷ್ಯರಿಗೆ--

26:2b.MAT.026.002 ಎರಡು ದಿವಸಗಳಾದ ಮೇಲೆ ಪಸ್ಕ ಹಬ್ಬ ಇರುವ ದೆಂದು ನೀವು ಬಲ್ಲಿರಿ. ಆಗ ಮನುಷ್ಯಕುಮಾರನು ಶಿಲುಬೆಗೆ ಹಾಕಲ್ಪಡುವದಕ್ಕಾಗಿ ಹಿಡಿದುಕೊಡಲ್ಪಡು ವನು ಅಂದನು.

26:3b.MAT.026.003 ಆಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಜನರ ಹಿರಿಯರೂ ಒಟ್ಟಾಗಿ ಸೇರಿ ಕಾಯಫನೆಂಬ ಮಹಾಯಾಜಕನ ಭವನಕ್ಕೆ ಬಂದು

26:4b.MAT.026.004 ತಾವು ಕುಯುಕ್ತಿಯಿಂದ ಯೇಸುವನ್ನು ಹಿಡಿದು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.

26:5b.MAT.026.005 ಆದರೆ ಅವರು ಜನರಲ್ಲಿ ಗದ್ದಲವಾದೀತು ಹಬ್ಬದಲ್ಲಿ ಬೇಡ ಅಂದರು.

26:6b.MAT.026.006 ಯೇಸು ಬೇಥಾನ್ಯದಲ್ಲಿ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿದ್ದನು.

26:7b.MAT.026.007 ಆತನು ಅಲ್ಲಿ ಊಟಕ್ಕೆ ಕೂತಿದ್ದಾಗ ಒಬ್ಬ ಸ್ತ್ರೀಯು ಅತಿಶ್ರೇಷ್ಠವಾದ ತೈಲದ ಭರಣಿಯೊಂದಿಗೆ ಆತನ ಬಳಿಗೆ ಬಂದು ಅದನ್ನು ಆತನ ತಲೆಯ ಮೇಲೆ ಹೊಯಿದಳು.

26:8b.MAT.026.008 ಆದರೆ ಆತನ ಶಿಷ್ಯರು ಇದನ್ನು ನೋಡಿ ಕೋಪ ಗೊಂಡು--ಈ ನಷ್ಟವು ಯಾವ ಉದ್ದೇಶಕ್ಕೆ?

26:9b.MAT.026.009 ಯಾಕಂದರೆ ಈ ತೈಲವನ್ನು ಹೆಚ್ಚಿನ ಹಣಕ್ಕೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ ಅಂದರು.

26:10b.MAT.026.010 ಆದರೆ ಯೇಸು ಅದನ್ನು ತಿಳಿದವನಾಗಿ ಅವರಿಗೆ --ನೀವು ಯಾಕೆ ಈ ಸ್ತ್ರೀಯನ್ನು ತೊಂದರೆಪಡಿಸುತ್ತೀರಿ? ಯಾಕಂದರೆ ಈಕೆಯು ನನಗಾಗಿ ಒಳ್ಳೇಕಾರ್ಯವನ್ನು ಮಾಡಿದ್ದಾಳೆ;

26:11b.MAT.026.011 ಬಡವರು ಯಾವಾಗಲೂ ನಿಮ್ಮ ಸಂಗಡ ಇರುತ್ತಾರೆ; ಆದರೆ ನಾನು ಯಾವಾಗಲೂ ನಿಮ್ಮ ಸಂಗಡ ಇರುವದಿಲ್ಲ.

26:12b.MAT.026.012 ಇದಲ್ಲದೆ ಈಕೆಯು ಈ ತೈಲವನ್ನು ನನ್ನ ದೇಹದ ಮೇಲೆ ಹೊಯಿದದ್ದ ರಿಂದ ನನ್ನ ಹೂಣುವಿಕೆಗಾಗಿ ಇದನ್ನು ಮಾಡಿದ್ದಾಳೆ ಅಂದನು.

26:13b.MAT.026.013 ನಾನು ನಿಮಗೆ ನಿಜವಾಗಿ ಹೇಳುವದೇ ನಂದರೆ--ಲೋಕದಲ್ಲೆಲ್ಲಾ ಎಲ್ಲೆಲ್ಲಿ ಈ ಸುವಾರ್ತೆಯು ಸಾರಲ್ಪಡುವದೋ ಅಲ್ಲೆಲ್ಲಾ ಈ ಸ್ತ್ರೀಯು ಮಾಡಿದ್ದು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳಲ್ಪಡುವದು ಅಂದನು.

26:14b.MAT.026.014 ಆಗ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದ ಇಸ್ಕರಿಯೋತ್‌ ಎಂಬವನು ಪ್ರಧಾನ ಯಾಜಕರ ಬಳಿಗೆ ಹೋಗಿ--

26:15b.MAT.026.015 ನಾನು ಆತನನ್ನು ನಿಮಗೆ ಒಪ್ಪಿಸಿಕೊಟ್ಟರೆ ನೀವು ನನಗೆ ಏನು ಕೊಡುತ್ತೀರಿ ಅಂದನು. ಆಗ ಅವರು ಅವನೊಂದಿಗೆ ಮೂವತ್ತು ಬೆಳ್ಳಿಯ ನಾಣ್ಯಗಳಿಗೆ ಒಪ್ಪಂದ ಮಾಡಿಕೊಂಡರು.

26:16b.MAT.026.016 ಅಂದಿನಿಂದ ಅವನು ಆತನನ್ನು ಹಿಡಿದುಕೊಡು ವದಕ್ಕೆ ಸಂದರ್ಭವನ್ನು ಹುಡುಕುತ್ತಿದ್ದನು.

26:17b.MAT.026.017 ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು--ಪಸ್ಕದ ಊಟಮಾಡುವದಕ್ಕೆ ನಾವು ನಿನಗಾಗಿ ಎಲ್ಲಿ ಸಿದ್ಧಮಾಡಬೇಕೆಂದು ನೀನು ಕೋರುತ್ತೀ ಎಂದು ಆತನನ್ನು ಕೇಳಿದರು.

26:18b.MAT.026.018 ಅದಕ್ಕೆ ಆತನು--ನೀವು ಪಟ್ಟಣದೊಳಕ್ಕೆ ಇಂಥವನ ಬಳಿಗೆ ಹೋಗಿ-- ನನ್ನ ಸಮಯವು ಸವಿಾಪವಾಗಿದೆ; ನನ್ನ ಶಿಷ್ಯರ ಜೊತೆಗೆ ನಿನ್ನ ಮನೆಯಲ್ಲಿ ಪಸ್ಕವನ್ನು ಆಚರಿಸುತ್ತೇನೆಂದು ಬೋಧಕನು ಹೇಳುತ್ತಾನೆ ಎಂಬದಾಗಿ ಅವನಿಗೆ ಹೇಳಿರಿ ಅಂದನು.

26:19b.MAT.026.019 ಯೇಸು ಅವರಿಗೆ ಆಜ್ಞಾಪಿಸಿದಂತೆ ಶಿಷ್ಯರು ಪಸ್ಕವನ್ನು ಸಿದ್ಧಪಡಿಸಿದರು.

26:20b.MAT.026.020 ಸಾಯಂಕಾಲ ವಾದಾಗ ಆತನು ಹನ್ನೆರಡು ಮಂದಿ ಶಿಷ್ಯರೊಂದಿಗೆ ಊಟಕ್ಕೆ ಕೂತುಕೊಂಡನು;

26:21b.MAT.026.021 ಅವರು ಊಟಮಾಡು ತ್ತಿದ್ದಾಗ ಆತನು--ನಾನು ನಿಮಗೆ ನಿಜವಾಗಿ ಹೇಳು ತ್ತೇನೆ, ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡುಕೊಡುವನು ಅಂದನು.

26:22b.MAT.026.022 ಆಗ ಅವರು ಬಹಳ ದುಃಖಪಟ್ಟು--ಕರ್ತನೇ, ಅವನು ನಾನೋ ಎಂದು ಅವರಲ್ಲಿ ಪ್ರತಿಯೊಬ್ಬನು ಆತನನ್ನು ಕೇಳಲಾರಂಭಿಸಿದರು.

26:23b.MAT.026.023 ಅದಕ್ಕೆ ಆತನು ಪ್ರತ್ಯುತ್ತರವಾಗಿ--ನನ್ನ ಸಂಗಡ ಪಾತ್ರೆಯಲ್ಲಿ ಕೈ ಅದ್ದಿದವನೇ ನನ್ನನ್ನು ಹಿಡುಕೊಡುವನು.

26:24b.MAT.026.024 ಮನುಷ್ಯಕುಮಾರನು ತನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೋಗುತ್ತಾನೆ; ಆದರೆ ಮನುಷ್ಯಕುಮಾರನು ಯಾವನಿಂದ ಹಿಡಿದು ಕೊಡಲ್ಪಡುತ್ತಾನೋ ಆ ಮನುಷ್ಯನಿಗೆ ಅಯ್ಯೋ! ಆ ಮನುಷ್ಯನು ಹುಟ್ಟದೆ ಹೋಗಿದ್ದರೆ ಅವನಿಗೆ ಒಳ್ಳೇದಾಗುತ್ತಿತ್ತು ಅಂದನು.

26:25b.MAT.026.025 ಆಗ ಅವನನ್ನು ಹಿಡಿದುಕೊಡಬೇಕೆಂದಿದ್ದ ಯೂದನು--ಬೋಧಕನೇ, ಅವನು ನಾನೋ? ಅಂದದ್ದಕ್ಕೆ ಆತನು--ನೀನೇ ಹೇಳಿದ್ದೀ ಅಂದನು.

26:26b.MAT.026.026 ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿ ಯನ್ನು ತೆಗೆದುಕೊಂಡು ಅದನ್ನು ಆಶೀರ್ವದಿಸಿ ಮುರಿದು ತನ್ನ ಶಿಷ್ಯರಿಗೆ ಕೊಟ್ಟು--ತಕ್ಕೊಳ್ಳಿರಿ, ತಿನ್ನಿರಿ; ಇದು ನನ್ನ ದೇಹ ಅಂದನು.

26:27b.MAT.026.027 ಮತ್ತು ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರ ಮಾಡಿ ಅವರಿಗೆ ಕೊಟ್ಟು --ನೀವೆಲ್ಲರೂ ಇದರಲ್ಲಿರುವದನ್ನು ಕುಡಿಯಿರಿ;

26:28b.MAT.026.028 ಯಾಕಂದರೆ ಇದು ಬಹು ಜನರ ಪಾಪಗಳ ಪರಿಹಾರಕ್ಕೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆ ಯ ನನ್ನ ರಕ್ತವಾಗಿದೆ ಅಂದನು.

26:29b.MAT.026.029 ಮತ್ತು ನಾನು ನಿಮಗೆ ಹೇಳುವದೇನಂದರೆ--ಇಂದಿನಿಂದ ನನ್ನ ತಂದೆಯ ರಾಜ್ಯದಲ್ಲಿ ನಿಮ್ಮೊಂದಿಗೆ ಹೊಸದಾಗಿ ಕುಡಿಯುವ ಆ ದಿನದವರೆಗೆ ನಾನು ಈ ದ್ರಾಕ್ಷಾರಸ ವನ್ನು ಕುಡಿಯುವದೇ ಇಲ್ಲ ಎಂದು ಹೇಳಿದನು.

26:30b.MAT.026.030 ತರುವಾಯ ಅವರು ಕೀರ್ತನೆ ಹಾಡಿ ಎಣ್ಣೇ ಮರಗಳ ಗುಡ್ಡಕ್ಕೆ ಹೋದರು.

26:31b.MAT.026.031 ಆಮೇಲೆ ಯೇಸು ಅವರಿಗೆ--ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ಅಭ್ಯಂತರಪಡುವಿರಿ; ಯಾಕಂದರೆ-- ನಾನು ಕುರುಬನನ್ನು ಹೊಡೆಯುವೆನು; ಮಂದೆ ಯ ಕುರಿಗಳು ಚದರಿಹೋಗುವವು ಎಂದು ಬರೆದದೆ;

26:32b.MAT.026.032 ಆದರೆ ನಾನು ಎದ್ದ ಮೇಲೆ ನಿಮಗಿಂತ ಮುಂಚಿತ ವಾಗಿ ಗಲಿಲಾಯಕ್ಕೆ ಹೋಗುವೆನು ಅಂದನು.

26:33b.MAT.026.033 ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ-- ಎಲ್ಲರೂ ನಿನ್ನ ವಿಷಯದಲ್ಲಿ ಅಭ್ಯಂತರಪಟ್ಟರೂ ನಾನು ಎಂದಿಗೂ ಅಭ್ಯಂತರಪಡುವದಿಲ್ಲ ಅಂದನು.

26:34b.MAT.026.034 ಯೇಸು ಅವ ನಿಗೆ--ಈ ರಾತ್ರಿಯಲ್ಲಿ ಹುಂಜ ಕೂಗುವದಕ್ಕಿಂತ ಮುಂಚೆ ಮೂರು ಸಾರಿ ನನ್ನನ್ನು ಅಲ್ಲಗಳೆಯುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.

26:35b.MAT.026.035 ಅದಕ್ಕೆ ಪೇತ್ರನು ಆತನಿಗೆ-- ನಿನ್ನೊಂದಿಗೆ ಸಾಯಬೇಕಾಗಿದ್ದರೂ ನಾನು ನಿನ್ನನ್ನು ಅಲ್ಲಗಳೆಯುವ ದೇ ಇಲ್ಲ ಅಂದನು. ಅದೇ ಪ್ರಕಾರ ಶಿಷ್ಯರೆಲ್ಲರೂ ಹೇಳಿದರು.

26:36b.MAT.026.036 ತರುವಾಯ ಯೇಸು ಶಿಷ್ಯರ ಸಂಗಡ ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದು ಅವರಿಗೆ--ನಾನು ಆಚೇ ಕಡೆಗೆ ಹೋಗಿ ಪ್ರಾರ್ಥಿಸುವಾಗ ನೀವು ಇಲ್ಲೇ ಕೂತುಕೊಳ್ಳಿರಿ ಅಂದನು.

26:37b.MAT.026.037 ಆತನು ತನ್ನ ಜೊತೆಯಲ್ಲಿ ಪೇತ್ರನನ್ನೂ ಜೆಬೆದಾಯನ ಇಬ್ಬರು ಕುಮಾರರನ್ನೂ ಕರೆದುಕೊಂಡು ಹೋಗಿ ದುಃಖಿಸುವದಕ್ಕೂ ಬಹು ವ್ಯಥೆಪಡುವದಕ್ಕೂ ಆರಂಭಿಸಿದನು.

26:38b.MAT.026.038 ಆತನು ಅವರಿಗೆ--ನನ್ನ ಪ್ರಾಣವು ಮರಣಹೊಂದುವಷ್ಟು ಅತಿ ದುಃಖಕ್ಕೆ ಒಳಗಾಗಿದೆ; ನೀವು ಇಲ್ಲೇ ಇದ್ದು ನನ್ನೊಡನೆ ಎಚ್ಚರವಾಗಿರ್ರಿ ಅಂದನು.

26:39b.MAT.026.039 ಆಮೇಲೆ ಆತನು ಸ್ವಲ್ಪದೂರ ಹೋಗಿ ಅಡ್ಡಬಿದ್ದು ಪ್ರಾರ್ಥಿ ಸುತ್ತಾ--ಓ ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ; ಆದಾಗ್ಯೂ ನನ್ನ ಚಿತ್ತದಂತಲ್ಲ; ನಿನ್ನ ಚಿತ್ತದಂತೆಯೇ ಆಗಲಿ ಅಂದನು.

26:40b.MAT.026.040 ಆತನು ತನ್ನ ಶಿಷ್ಯರ ಬಳಿಗೆ ಬಂದಾಗ ಅವರು ನಿದ್ರೆ ಮಾಡುವದನ್ನು ಕಂಡು ಪೇತ್ರನಿಗೆ--ಏನು ನೀವು ಒಂದು ಗಳಿಗೆಯಾದರೂ ನನ್ನೊಡನೆ ಎಚ್ಚರವಾಗಿರಲಾರಿರಾ?

26:41b.MAT.026.041 ನೀವು ಶೋಧನೆಗೆ ಒಳಗಾ ಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ನಿಜವೇ; ಆದರೆ ಶರೀರವು ಬಲಹೀನ ವಾಗಿದೆ ಅಂದನು.

26:42b.MAT.026.042 ತಿರಿಗಿ ಆತನು ಎರಡನೆಯ ಸಾರಿ ಹೋಗಿ ಪ್ರಾರ್ಥಿಸುತ್ತಾ--ಓ ನನ್ನ ತಂದೆಯೇ, ನಾನು ಈ ಪಾತ್ರೆಯಲ್ಲಿ ಕುಡಿಯದ ಹೊರತು ಇದು ನನ್ನನ್ನು ಬಿಟ್ಟು ಹೋಗಕೂಡದಾಗಿದ್ದರೆ ನಿನ್ನ ಚಿತ್ತವೇ ಆಗಲಿ ಅಂದನು.

26:43b.MAT.026.043 ಆತನು ಬಂದು ಅವರು ತಿರಿಗಿ ನಿದ್ದೆ ಮಾಡುವದನ್ನು ಕಂಡನು; ಯಾಕಂದರೆ ಅವರ ಕಣ್ಣುಗಳು ಭಾರವಾಗಿದ್ದವು.

26:44b.MAT.026.044 ಆತನು ಅವರನ್ನು ಬಿಟ್ಟು ತಿರಿಗಿ ಹೊರಟು ಹೋಗಿ ಮೂರನೆಯ ಸಾರಿ ಅದೇ ಮಾತುಗಳನ್ನು ಹೇಳಿ ಪ್ರಾರ್ಥಿಸಿದನು

26:45b.MAT.026.045 ತರುವಾಯ ಆತನು ತನ್ನ ಶಿಷ್ಯರ ಬಳಿಗೆ ಬಂದು ಅವರಿಗೆ--ಈಗ ನಿದ್ದೆ ಮಾಡಿ ವಿಶ್ರಾಂತಿತಕ್ಕೊಳ್ಳಿರಿ; ಇಗೋ, ಮನುಷ್ಯಕುಮಾರನು ಪಾಪಿಷ್ಠರ ಕೈಗಳಿಗೆ ಹಿಡಿದು ಕೊಡಲ್ಪಡುವ ಸಮಯವು ಸವಿಾಪಿಸಿದೆ;

26:46b.MAT.026.046 ಏಳಿರಿ, ನಾವು ಹೋಗೋಣ; ಇಗೋ, ನನ್ನನ್ನು ಹಿಡುಕೊಡು ವವನು ಸವಿಾಪವಾಗಿದ್ದಾನೆ ಅಂದನು.

26:47b.MAT.026.047 ಆತನು ಇನ್ನೂ ಮಾತನಾಡುತ್ತಿರುವಾಗ ಇಗೋ, ಪ್ರಧಾನಯಾಜಕರ ಮತ್ತು ಜನರ ಹಿರಿಯರ ಕಡೆಯಿಂದ ಕತ್ತಿ ದೊಣ್ಣೆಗಳೊಡನೆ ಬಂದ ದೊಡ್ಡ ಜನ ಸಮೂಹದೊಂದಿಗೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದನೂ ಬಂದನು.

26:48b.MAT.026.048 ಆತನನ್ನು ಹಿಡು ಕೊಡುವದಕ್ಕಿದ್ದವನು ಅವರಿಗೆ--ನಾನು ಯಾವಾತನಿಗೆ ಮುದ್ದಿಡುತ್ತೇನೋ ಅವನೇ ಆತನು. ಆತನನ್ನು ಗಟ್ಟಿ ಯಾಗಿ ಹಿಡಿಯಿರಿ ಎಂದು ಗುರುತನ್ನು ಹೇಳಿದ್ದನು.

26:49b.MAT.026.049 ಕೂಡಲೆ ಅವನು ಯೇಸುವಿನ ಬಳಿಗೆ ಬಂದು ಬೋಧಕನೇ, ವಂದನೆ ಎಂದು ಹೇಳಿ ಆತನಿಗೆ ಮುದ್ದಿಟ್ಟನು.

26:50b.MAT.026.050 ಅದಕ್ಕೆ ಯೇಸು ಅವನಿಗೆ--ಸ್ನೇಹಿತನೇ, ನೀನು ಯಾಕೆ ಬಂದಿರುತ್ತೀ ಎಂದು ಕೇಳಿದನು; ಆಗ ಅವರು ಬಂದು ಯೇಸುವಿನ ಮೇಲೆ ಕೈಹಾಕಿ ಆತನನ್ನು ಹಿಡಿದರು.

26:51b.MAT.026.051 ಇಗೋ, ಯೇಸುವಿನ ಸಂಗಡ ಇದ್ದವರಲ್ಲಿ ಒಬ್ಬನು ಕೈಚಾಚಿ ತನ್ನ ಕತ್ತಿಯನ್ನು ಹಿರಿದು ಮಹಾ ಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿದನು.

26:52b.MAT.026.052 ಆಗ ಯೇಸು ಅವನಿಗೆ--ನಿನ್ನ ಕತ್ತಿಯನ್ನು ತಿರಿಗಿ ಅದರ ಒರೆಯಲ್ಲಿ ಸೇರಿಸು; ಯಾಕಂದರೆ ಕತ್ತಿಯನ್ನು ಹಿಡಿದವರೆಲ್ಲರು ಕತ್ತಿಯಿಂದ ನಾಶವಾಗುವರು.

26:53b.MAT.026.053 ನಾನು ಈಗ ನನ್ನ ತಂದೆಗೆ ಪ್ರಾರ್ಥಿಸಲಾರನೆಂದೂ ಆತನು ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚಾದ ದೂತರನ್ನು ನನಗೆ ಕೊಡ ಲಾರನೆಂದೂ ನೀನು ನೆನಸುತ್ತಿಯೋ?

26:54b.MAT.026.054 ಹಾಗಾದರೆ ಇವುಗಳು ಹೀಗೆ ಆಗಬೇಕೆಂಬ ಬರಹಗಳು ನೆರವೇರು ವದು ಹೇಗೆ ಅಂದನು.

26:55b.MAT.026.055 ಅದೇ ಗಳಿಗೆಯಲ್ಲಿ ಯೇಸು ಜನಸಮೂಹಗಳಿಗೆ--ಒಬ್ಬ ಕಳ್ಳನಿಗೆ ವಿರೋಧವಾಗಿ ಬರುವಂತೆ ಕತ್ತಿಗಳೊಂದಿಗೂ ದೊಣ್ಣೆಗಳೊಂದಿಗೂ ನನ್ನನ್ನು ಹಿಡಿಯುವದಕ್ಕಾಗಿ ಬಂದಿರಾ? ನಾನು ದಿನಾ ಲು ನಿಮ್ಮ ಸಂಗಡ ದೇವಾಲಯದಲ್ಲಿ ಕೂತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲ;

26:56b.MAT.026.056 ಆದರೆ ಪ್ರವಾದಿಗಳ ಬರಹಗಳು ನೆರವೇರುವಂತೆ ಇದೆಲ್ಲಾ ಆಯಿತು ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.

26:57b.MAT.026.057 ಮತ್ತು ಯೇಸುವನ್ನು ಹಿಡಿದಿದ್ದವರು ಆತನನ್ನು ಮಹಾಯಾಜಕನಾದ ಕಾಯಫನ ಬಳಿಗೆ ತಕ್ಕೊಂಡು ಹೋದರು; ಅಲ್ಲಿ ಶಾಸ್ತ್ರಿಗಳೂ ಹಿರಿಯರೂ ಕೂಡಿಬಂದಿದ್ದರು.

26:58b.MAT.026.058 ಆದರೆ ಪೇತ್ರನು ಮಹಾ ಯಾಜಕನ ಭವನದವರೆಗೆ ದೂರದಿಂದ ಆತನನ್ನು ಹಿಂಬಾಲಿಸಿ ಒಳಗೆ ಹೋಗಿ ಅಂತ್ಯವೇನಾಗುವದೆಂದು ನೋಡಲು ಸೇವಕರೊಂದಿಗೆ ಕೂತುಕೊಂಡನು.

26:59b.MAT.026.059 ಆಗ ಪ್ರಧಾನಯಾಜಕರೂ ಹಿರಿಯರೂ ಆಲೋ ಚನಾ ಸಭೆಯವರೆಲ್ಲರೂ ಯೇಸುವಿಗೆ ವಿರೋಧವಾಗಿ ಆತನನ್ನು ಕೊಲ್ಲಿಸುವಂತೆ ಸುಳ್ಳು ಸಾಕ್ಷಿಗಾಗಿ ಹುಡುಕಿ ದರು.

26:60b.MAT.026.060 ಆದರೆ ಯಾರೂ ಸಿಕ್ಕಲಿಲ್ಲ; ಹೌದು, ಬಹುಮಂದಿ ಸುಳ್ಳು ಸಾಕ್ಷಿಗಳು ಬಂದರೂ ಅವರಿಗೆ ಏನೂ ದೊರೆಯಲಿಲ್ಲ; ಕಡೆಯಲ್ಲಿ ಇಬ್ಬರು ಸುಳ್ಳು ಸಾಕ್ಷಿಗಳು ಬಂದು--

26:61b.MAT.026.061 ನಾನು ದೇವಾಲಯ ವನ್ನು ಕೆಡವಿ ಮೂರು ದಿವಸಗಳಲ್ಲಿ ಕಟ್ಟಬಲ್ಲೆನೆಂದು ಇವನು ಹೇಳಿದನು ಅಂದರು.

26:62b.MAT.026.062 ಮಹಾಯಾಜಕರು ಎದ್ದು ಆತನಿಗೆ--ನೀನು ಏನೂ ಉತ್ತರ ಕೊಡುವದಿ ಲ್ಲವೋ? ಇವರು ನಿನಗೆ ವಿರೋಧವಾಗಿ ಸಾಕ್ಷಿ ಹೇಳುವದು ಏನು ಅಂದನು.

26:63b.MAT.026.063 ಆದರೆ ಯೇಸು ಸುಮ್ಮನಿದ್ದನು. ಆಗ ಮಹಾಯಾಜಕನು ಪ್ರತ್ಯುತ್ತರವಾಗಿ ಆತನಿಗೆ--ನೀನು ದೇವಕುಮಾರನಾದ ಕ್ರಿಸ್ತನಾದರೆ ಅದನ್ನು ನಮಗೆ ಹೇಳಬೇಕೆಂದು ಜೀವಸ್ವರೂಪನಾದ ದೇವರ ಆಣೆಯನ್ನು ನಿನಗೆ ಇಡುತ್ತೇನೆ ಅಂದನು.

26:64b.MAT.026.064 ಅದಕ್ಕೆ ಯೇಸು ಅವನಿಗೆ--ನೀನೇ ಹೇಳಿದ್ದೀ; ಆದರೂ--ಇನ್ನು ಮೇಲೆ ಮನುಷ್ಯಕುಮಾರನು ಸರ್ವ ಶಕ್ತನ ಬಲಪಾರ್ಶ್ವದಲ್ಲಿ ಕೂತಿರುವದನ್ನೂ ಆಕಾಶದ ಮೇಘಗಳ ಮೇಲೆ ಬರುವದನ್ನೂ ನೀವು ನೋಡುವಿರಿ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.

26:65b.MAT.026.065 ಆಗ ಮಹಾ ಯಾಜಕನು ತನ್ನ ಬಟ್ಟೆಗಳನ್ನು ಹರಕೊಂಡು--ಇವನು ದೇವದೂಷಣೆ ಮಾಡಿದ್ದಾನೆ; ನಮಗೆ ಇನ್ನು ಹೆಚ್ಚಿನ ಸಾಕ್ಷಿಗಳು ಯಾಕೆ ಬೇಕು? ಇಗೋ, ಈಗಲೇ ಇವನ ದೇವದೂಷಣೆಯನ್ನು ನೀವು ಕೇಳಿದ್ದೀರಲ್ಲಾ 66ನಿಮಗೆ ಹೇಗೆ ತೋರುತ್ತದೆ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ--ಇವ

26:66b.MAT.026.066 ನಿಮಗೆ ಹೇಗೆ ತೋರುತ್ತದೆ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ--ಇವನು ಮರಣಕ್ಕೆ ಪಾತ್ರನು ಅಂದರು.

26:67b.MAT.026.067 ಆಮೇಲೆ ಅವರು ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಬೇರೆ ಕೆಲವರು ಆತನನ್ನು ಹೊಡೆದರು.

26:68b.MAT.026.068 ಕ್ರಿಸ್ತನೇ, ನಿನ್ನನ್ನು ಹೊಡೆದವರು ಯಾರು? ನಮಗೆ ಪ್ರವಾದನೆ ಹೇಳು ಅಂದರು.

26:69b.MAT.026.069 ಆಗ ಪೇತ್ರನು ಭವನದ ಹೊರಗೆ ಕೂತಿರಲು ಒಬ್ಬ ಹುಡುಗಿಯು ಅವನ ಬಳಿಗೆ ಬಂದು-- ನೀನೂ ಗಲಿಲಾಯದ ಯೇಸುವಿನೊಂದಿಗೆ ಇದ್ದವನು ಅಂದಳು.

26:70b.MAT.026.070 ಆದರೆ ಅವನು ಎಲ್ಲರ ಮುಂದೆ-- ನೀನು ಏನು ಹೇಳುತ್ತಿಯೋ ನಾನು ಅರಿಯೆನು ಎಂದು ಅಲ್ಲಗಳೆದನು.

26:71b.MAT.026.071 ಅವನು ದ್ವಾರಾಂಗಳ ದೊಳಗೆ ಹೋದಾಗ ಮತ್ತೊಬ್ಬ ಹುಡುಗಿಯು ಅವನನ್ನು ನೋಡಿ ಅಲ್ಲಿದ್ದವರಿಗೆ--ಇವನು ಸಹ ನಜರೇತಿನ ಯೇಸುವಿನೊಂದಿಗೆ ಇದ್ದವನು ಅಂದಳು.

26:72b.MAT.026.072 ಆಗ ಅವನು ಪ್ರಮಾಣಮಾಡಿ--ನಾನು ಆ ಮನುಷ್ಯನನ್ನು ಅರಿಯೆನು ಎಂದು ತಿರಿಗಿ ಅಲ್ಲಗಳೆ ದನು.

26:73b.MAT.026.073 ಮತ್ತೆ ಸ್ವಲ್ಪ ಸಮಯವಾದ ಮೇಲೆ ಅಲ್ಲಿ ನಿಂತಿದ್ದವರು ಪೇತ್ರನಿಗೆ--ನಿಶ್ಚಯವಾಗಿ ನೀನು ಸಹ ಅವರಲ್ಲಿ ಒಬ್ಬನು; ಯಾಕಂದರೆ ನಿನ್ನ ಭಾಷೆಯು ನಿನ್ನನ್ನು ತೋರಿಸಿಕೊಡುತ್ತದೆ ಅಂದರು.

26:74b.MAT.026.074 ಅದಕ್ಕೆ ಅವನು--ಆ ಮನುಷ್ಯನನ್ನು ನಾನು ಅರಿಯೆನು ಎಂದು ಶಪಿಸಿಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಪ್ರಾರಂಭಿಸಿದನು. ಕೂಡಲೆ ಹುಂಜವು ಕೂಗಿತು.ಆಗ ಪೇತ್ರನು--ಹುಂಜವು ಕೂಗುವದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ಅಲ್ಲಗಳೆ ಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.

26:75b.MAT.026.075 ಆಗ ಪೇತ್ರನು--ಹುಂಜವು ಕೂಗುವದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ಅಲ್ಲಗಳೆ ಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.

27

27:1b.MAT.027.001 ಬೆಳಗಾದಾಗ ಎಲ್ಲಾ ಪ್ರಧಾನ ಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸುವದಕ್ಕೆ ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು.

27:2b.MAT.027.002 ಮತ್ತು ಅವರು ಆತನನ್ನು ಕಟ್ಟಿ ತೆಗೆದುಕೊಂಡು ಹೋಗಿ ಅಧಿಪತಿಯಾದ ಪೊಂತ್ಯ ಪಿಲಾತನಿಗೆ ಒಪ್ಪಿಸಿದರು.

27:3b.MAT.027.003 ಆಗ ಆತನನ್ನು ಹಿಡುಕೊಟ್ಟ ಯೂದನು ಆತನಿಗೆ ಮರಣದಂಡನೆಯ ತೀರ್ಪಾದದ್ದನ್ನು ನೋಡಿ ಪಶ್ಚಾ ತ್ತಾಪಪಟ್ಟು ಆ ಮೂವತ್ತು ಬೆಳ್ಳಿಯ ನಾಣ್ಯಗಳನು ತಿರಿಗಿ ಪ್ರಧಾನ ಯಾಜಕರ ಮತ್ತು ಹಿರಿಯರ ಬಳಿಗೆ ತಂದು

27:4b.MAT.027.004 ಅವನು--ನಾನು ನಿರಪರಾಧದ ರಕ್ತವನ್ನು ಹಿಡುಕೊಟ್ಟು ಪಾಪಮಾಡಿದ್ದೇನೆ ಅಂದನು. ಅದಕ್ಕೆ ಅವರು--ಅದು ನಮಗೇನು? ನೀನೇ ಅದನ್ನು ನೋಡಿಕೋ ಅಂದರು.

27:5b.MAT.027.005 ಮತ್ತು ಅವನು ಆ ಬೆಳ್ಳಿಯ ನಾಣ್ಯಗಳನ್ನು ದೇವಾಲಯದಲ್ಲಿ ಬಿಸಾಡಿಬಿಟ್ಟು ಹೊರಟುಹೋಗಿ ಉರ್ಲು ಹಾಕಿಕೊಂಡನು.

27:6b.MAT.027.006 ಆಗ ಪ್ರಧಾನ ಯಾಜಕರು ಆ ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು--ಇವುಗಳನ್ನು ಬೊಕ್ಕಸದಲ್ಲಿ ಹಾಕು ವದು ನ್ಯಾಯವಲ್ಲ; ಯಾಕಂದರೆ ಅದು ರಕ್ತದಕ್ರಯ ವಾಗಿದೆ ಅಂದರು.

27:7b.MAT.027.007 ಅವರು ಆಲೋಚನೆ ಮಾಡಿ ಪರದೇಶಿಗಳನ್ನು ಹೂಣಿಡುವದಕ್ಕೆ ಆ ಹಣದಿಂದ ಕುಂಬಾರನ ಹೊಲವನ್ನು ಕೊಂಡುಕೊಂಡರು.

27:8b.MAT.027.008 ಈ ಕಾರಣದಿಂದ ಆ ಹೊಲವು ರಕ್ತದ ಹೊಲವೆಂದು ಈ ದಿನದ ವರೆಗೆ ಕರೆಯಲ್ಪಟ್ಟಿದೆ.

27:9b.MAT.027.009 ಆಗ ಪ್ರವಾದಿಯಾದ ಯೆರೆವಿಾಯನು ಹೇಳಿದ ಮಾತು ನೆರವೇರಿತು; ಅದೇನಂದರೆ--ಇಸ್ರಾಯೇಲಿನ ಮಕ್ಕಳಲ್ಲಿ ಅವರು ಬೆಲೆ ಕಟ್ಟಿದವನ ಬೆಲೆಯಾದ ಮೂವತ್ತು ಬೆಳ್ಳಿಯ ನಾಣ್ಯಗಳನ್ನು ತಕ್ಕೊಂಡು

27:10b.MAT.027.010 ಕರ್ತನು ನನಗಾಗಿ ನೇಮಿಸಿದ ಹಾಗೆ ಅವುಗಳನ್ನು ಕುಂಬಾರನ ಹೊಲಕ್ಕಾಗಿ ಕೊಟ್ಟರು ಎಂಬದು.

27:11b.MAT.027.011 ಯೇಸು ಅಧಿಪತಿಯ ಮುಂದೆ ನಿಂತಿದ್ದನು; ಆಗ ಆ ಅಧಿಪತಿಯು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. ಅದಕ್ಕೆ ಯೇಸು ಅವನಿಗೆ--ನೀನೇ ಹೇಳುತ್ತೀ ಅಂದನು.

27:12b.MAT.027.012 ಆಗ ಪ್ರಧಾನ ಯಾಜಕರೂ ಹಿರಿಯರೂ ಆತನ ಮೇಲೆ ದೂರು ಹೇಳುತ್ತಿರುವಾಗ ಆತನು ಏನು ಉತ್ತರ ಕೊಡಲಿಲ್ಲ.

27:13b.MAT.027.013 ಆಗ ಪಿಲಾತನು ಆತನಿಗೆ--ನಿನಗೆ ವಿರೋಧವಾಗಿ ಇವರು ಇಷ್ಟು ದೂರು ಹೇಳುವದನ್ನು ನೀನು ಕೇಳುವದಿಲ್ಲವೋ ಅಂದನು.

27:14b.MAT.027.014 ಆತನು ಒಂದು ಮಾತಿಗಾದರೂ ಅವನಿಗೆ ಉತ್ತರಕೊಡದೆ ಇದ್ದದರಿಂದ ಅಧಿಪತಿಯು ಅತ್ಯಾಶ್ಚರ್ಯಪಟ್ಟನು.

27:15b.MAT.027.015 ಆ ಹಬ್ಬದಲ್ಲಿ ಜನರು ಇಷ್ಟಪಡುವ ಒಬ್ಬ ಸೆರೆಯವನನ್ನು ಅಧಿಪತಿಯು ಬಿಟ್ಟುಬಿಡುವ ಪದ್ಧತಿ ಯಿತ್ತು.

27:16b.MAT.027.016 ಆ ಸಮಯದಲ್ಲಿ ಬರಬ್ಬನೆಂಬ ಪ್ರಸಿದ್ಧನಾದ ಸೆರೆಯವನೊಬ್ಬನು ಅವರಲ್ಲಿ ಇದ್ದನು.

27:17b.MAT.027.017 ಆದದ ರಿಂದ ಅವರು ಕೂಡಿಬಂದಿದ್ದಾಗ ಪಿಲಾತನು ಅವರಿಗೆ--ನಿಮಗೆ ಯಾರನ್ನು ಬಿಟ್ಟುಕೊಡ ಬೇಕನ್ನುತ್ತೀರಿ? ಬರಬ್ಬನನ್ನೋ? ಇಲ್ಲವೆ ಕ್ರಿಸ್ತನನ್ನಿಸಿಕೊಳ್ಳುವ ಯೇಸು ವನ್ನೋ ಎಂದು ಕೇಳಿದನು.

27:18b.MAT.027.018 ಯಾಕಂದರೆ ಆತನನ್ನು ಅವರು ಹೊಟ್ಟೇಕಿಚ್ಚಿನಿಂದ ಹಿಡುಕೊಟ್ಟಿದ್ದಾರೆಂದು ಅವನಿಗೆ ಗೊತ್ತಿತ್ತು.

27:19b.MAT.027.019 ಅವನು ನ್ಯಾಯಾಸನದ ಮೇಲೆ ಕೂತಿದ್ದಾಗ ಅವನ ಹೆಂಡತಿಯು ಅವ ನಿಗೆ--ನೀನು ಆ ನೀತಿವಂತನ ಗೊಡವೆಗೆ ಹೋಗ ಬೇಡ; ಯಾಕಂದರೆ ಈ ದಿವಸ ನಾನು ಸ್ವಪ್ನದಲ್ಲಿ ಆತನ ವಿಷಯವಾಗಿ ಬಹಳ ಕಷ್ಟಪಟ್ಟಿದ್ದೇನೆ ಎಂದು ಹೇಳಿಕಳುಹಿಸಿದಳು.

27:20b.MAT.027.020 ಆದರೆ ಪ್ರಧಾನ ಯಾಜಕರು ಮತ್ತು ಹಿರಿಯರು ಬರಬ್ಬನನ್ನು ಬಿಟ್ಟುಕೊಟ್ಟು ಯೇಸು ವನ್ನು ಕೊಲ್ಲುವಂತೆ ಬೇಡಿಕೊಳ್ಳುವ ಹಾಗೆ ಸಮೂಹ ವನ್ನು ಒಡಂಬಡಿಸಿದರು.

27:21b.MAT.027.021 ಅಧಿಪತಿಯು ಪ್ರತ್ಯುತ್ತರ ವಾಗಿ ಅವರಿಗೆ--ಈ ಇಬ್ಬರಲ್ಲಿ ನಿಮಗೆ ಯಾರನ್ನು ಬಿಟ್ಟು ಕೊಡಬೇಕನ್ನುತ್ತೀರಿ ಅನ್ನಲು ಅವರು--ಬರಬ್ಬನನ್ನು ಅಂದರು.

27:22b.MAT.027.022 ಪಿಲಾತನು ಅವರಿಗೆ--ಹಾಗಾದರೆ ಕ್ರಿಸ್ತನನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ ಅನ್ನಲು ಅವರೆಲ್ಲರೂ--ಅವನನ್ನು ಶಿಲುಬೆಗೆ ಹಾಕಿಸು ಎಂದು ಅವನಿಗೆ ಹೇಳಿದರು.

27:23b.MAT.027.023 ಆಗ ಅಧಿಪತಿಯು--ಯಾಕೆ? ಆತನು ಕೆಟ್ಟದ್ದೇನು ಮಾಡಿ ದ್ದಾನೆ ಅಂದನು. ಆದರೆ ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಹೆಚ್ಚಾಗಿ ಕೂಗಿಕೊಂಡರು.

27:24b.MAT.027.024 ಪಿಲಾ ತನು ತನ್ನ ಯತ್ನ ನಡೆಯಲಿಲ್ಲ, ಗದ್ದಲವೇ ಹೆಚ್ಚಾಗುತ್ತದೆ ಎಂದು ನೋಡಿ ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು--ಈ ನೀತಿವಂತನ ರಕ್ತಕ್ಕೆ ನಾನು ನಿರಪರಾಧಿ, ಅದನ್ನು ನೀವೇ ನೋಡಿಕೊಳ್ಳಿರಿ ಅಂದನು.

27:25b.MAT.027.025 ಅದಕ್ಕೆ ಜನರೆ ಲ್ಲರೂ ಪ್ರತ್ಯುತ್ತರವಾಗಿ--ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ ಅಂದರು.

27:26b.MAT.027.026 ಆಗ ಅವನು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವಂತೆ ಒಪ್ಪಿಸಿದನು.

27:27b.MAT.027.027 ತರುವಾಯ ಅಧಿಪತಿಯ ಸೈನಿಕರು ಯೇಸುವನ್ನು ಸಾಮಾನ್ಯವಾದ ಕೋಣೆಯೊಳಕ್ಕೆ ತೆಗೆದುಕೊಂಡು ಹೋಗಿ ಸೈನಿಕರ ಪೂರ್ಣ ತಂಡವನ್ನು ಆತನ ಮುಂದೆ ಕೂಡಿಸಿದರು.

27:28b.MAT.027.028 ಮತ್ತು ಅವರು ಆತನ ಬಟ್ಟೆಗಳನ್ನು ತೆಗೆದು ರಕ್ತವರ್ಣದ ನಿಲುವಂಗಿಯನ್ನು ಆತನಿಗೆ ತೊಡಿಸಿದರು.

27:29b.MAT.027.029 ತರುವಾಯ ಅವರು ಒಂದು ಮುಳ್ಳಿನ ಕಿರೀಟವನ್ನು ಹೆಣೆದು ಅದನ್ನು ಆತನ ತಲೆಯ ಮೇಲಿಟ್ಟು ಬಲಗೈಯಲ್ಲಿ ಒಂದು ಬೆತ್ತವನ್ನು ಕೊಟ್ಟು ಆತನ ಮುಂದೆ ಮೊಣಕಾಲೂರಿ--ಯೆಹೂದ್ಯರ ಅರಸನೇ, ವಂದನೆ ಎಂದು ಹೇಳಿ ಆತನನ್ನು ಹಾಸ್ಯಮಾಡಿದರು.

27:30b.MAT.027.030 ಅವರು ಆತನ ಮೇಲೆ ಉಗುಳಿ ಆ ಬೆತ್ತವನ್ನು ತಕ್ಕೊಂಡು ಆತನ ತಲೆಯ ಮೇಲೆ ಹೊಡೆದರು.

27:31b.MAT.027.031 ಅವರು ಆತನಿಗೆ ಹಾಸ್ಯಮಾಡಿದ ಮೇಲೆ ಆ ನಿಲುವಂಗಿಯನ್ನು ಆತ ನಿಂದ ತೆಗೆದು ಆತನ ಸ್ವಂತವಸ್ತ್ರವನ್ನು ಹೊದಿಸಿ ಆತನನ್ನು ಶಿಲುಬೆಗೆ ಹಾಕುವದಕ್ಕಾಗಿ ತಕ್ಕೊಂಡು ಹೋದರು.

27:32b.MAT.027.032 ಅವರು ಹೊರಗೆ ಬರುತ್ತಿರುವಾಗ ಕುರೇನ್ಯನಾದ ಸೀಮೋನನೆಂಬ ಮನುಷ್ಯನನ್ನು ಕಂಡು ಆತನ ಶಿಲುಬೆಯನ್ನು ಹೊರುವಂತೆ ಅವನನ್ನು ಬಲವಂತ ಮಾಡಿದರು.

27:33b.MAT.027.033 ಆಮೇಲೆ ಅವರು ಗೊಲ್ಗೊಥಾ ಎಂದು ಕರೆಯಲ್ಪಟ್ಟ ಕಪಾಲವೆಂಬ ಸ್ಥಳಕ್ಕೆ ಬಂದರು.

27:34b.MAT.027.034 ಆಗ ಅವರು ಆತನಿಗೆ ಕಹಿಬೆರಸಿದ ಹುಳಿರಸವನ್ನು ಕುಡಿಯಕೊಟ್ಟರು; ಮತ್ತು ಆತನು ಅದನ್ನು ರುಚಿ ನೋಡಿ ಕುಡಿಯಲೊಲ್ಲದೆ ಇದ್ದನು.

27:35b.MAT.027.035 ತರುವಾಯ ಅವರು ಆತನನ್ನು ಶಿಲುಬೆಗೆ ಹಾಕಿದ ಮೇಲೆ ಆತನ ಬಟ್ಟೆಗಳಿಗಾಗಿ ಚೀಟು ಹಾಕಿ ಹಂಚಿಕೊಂಡರು; ಇದು ಪ್ರವಾದಿಯ ಮುಖಾಂತರ ಹೇಳಲ್ಪಟ್ಟದ್ದು ನೆರವೇರುವಂತೆ ಆಯಿತು. ಅದೇನಂದರೆ--ಅವರು ನನ್ನ ಬಟ್ಟೆಗಳನ್ನು ತಮ್ಮಲ್ಲಿ ಪಾಲುಮಾಡಿಕೊಂಡರು; ಮತ್ತು ನನ್ನ ಅಂಗಿಗೋಸ್ಕರ ಚೀಟು ಹಾಕಿ

27:36b.MAT.027.036 ಮತ್ತು ಅವರು ಕೆಳಗೆ ಕೂತುಕೊಂಡು ಆತನನ್ನು ಕಾಯುತ್ತಿದ್ದರು.

27:37b.MAT.027.037 ಇದಲ್ಲದೆ ಆತನ ತಲೆಯ ಮೇಲ್ಭಾಗದಲ್ಲಿ--ಇವನು ಯೆಹೂದ್ಯರ ಅರಸನಾದ ಯೇಸು ಎಂದು ಆತನ ವಿಷಯವಾದ ಅಪರಾಧವನ್ನು ಬರೆಯಿಸಿದರು.

27:38b.MAT.027.038 ಅಲ್ಲಿ ಒಬ್ಬನನ್ನು ಬಲಗಡೆಯಲ್ಲಿಯೂ ಮತ್ತೊಬ್ಬನನ್ನು ಎಡಗಡೆಯ ಲ್ಲಿಯೂ ಇಬ್ಬರು ಕಳ್ಳರನ್ನು ಆತನೊಂದಿಗೆ ಶಿಲುಬೆಗೆ ಹಾಕಿದರು.

27:39b.MAT.027.039 ಅಲ್ಲಿ ಹೋಗುತ್ತಿದ್ದವರು ಆತನನ್ನು ದೂಷಿಸಿ ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾ--

27:40b.MAT.027.040 ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ನೀನೇ ರಕ್ಷಿಸಿಕೋ; ಮತ್ತು ನೀನು ದೇವಕುಮಾರನಾಗಿದ್ದರೆ ಶಿಲುಬೆಯಿಂದ ಕೆಳಗೆ ಇಳಿದು ಬಾ ಅಂದರು.

27:41b.MAT.027.041 ಅದೇ ಮೇರೆಗೆ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಹಿರಿಯರೂ ಆತನಿಗೆ ಹಾಸ್ಯ ಮಾಡಿ--

27:42b.MAT.027.042 ಇವನು ಬೇರೆಯವರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.ಇವನು ಇಸ್ರಾಯೇಲಿನ ಅರಸನಾಗಿದ್ದರೆ ಈಗಲೇ ಶಿಲುಬೆಯಿಂದ ಕೆಳಗಿಳಿದು ಬರಲಿ; ಆಗ ನಾವು ಅವನನ್ನು ನಂಬುವೆವು;

27:43b.MAT.027.043 ಇವನು ದೇವರಲ್ಲಿ ವಿಶ್ವಾಸವಿಟ್ಟವನು; ದೇವರಿಗೆ ಇಷ್ಟವಿದ್ದರೆ ಆತನು ಇವನನ್ನು ಈಗ ಬಿಡಿಸಲಿ; ಯಾಕಂದರೆ ಆತನು--ನಾನು ದೇವಕುಮಾರನು ಎಂದು ಹೇಳಿದ್ದಾನೆ ಅಂದರು.

27:44b.MAT.027.044 ಆತನ ಜೊತೆಗೆ ಶಿಲುಬೆಗೆ ಹಾಕಲ್ಪಟ್ಟಿದ್ದ ಕಳ್ಳರು ಸಹ ಅದೇ ರೀತಿಯಾಗಿ ಆತನನ್ನು ನಿಂದಿಸಿದರು.

27:45b.MAT.027.045 ಆಗ ಆರನೇ ತಾಸಿನಿಂದ ಒಂಭತ್ತನೇ ತಾಸಿನವರೆಗೆ ದೇಶದ ಮೇಲೆಲ್ಲಾ ಕತ್ತಲೆ ಇತ್ತು.

27:46b.MAT.027.046 ಹೆಚ್ಚು ಕಡಿಮೆ ಒಂಭತ್ತನೆಯ ತಾಸಿನಲ್ಲಿ ಯೇಸು--ಏಲೀ, ಏಲೀ, ಲಮಾ ಸಬಕ್ತಾನೀ? ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈ ಬಿಟ್ಟಿದ್ದೀ ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.

27:47b.MAT.027.047 ಅಲ್ಲಿ ನಿಂತಿ ದ್ದವರಲ್ಲಿ ಕೆಲವರು ಇದನ್ನು ಕೇಳಿದಾಗ--ಇವನು ಎಲೀಯನನ್ನು ಕರೆಯುತ್ತಾನೆ ಅಂದರು.

27:48b.MAT.027.048 ಕೂಡಲೆ ಅವರಲ್ಲಿ ಒಬ್ಬನು ಓಡಿಹೋಗಿ ಸ್ಪಂಜನ್ನು ತಕ್ಕೊಂಡು ಅದನ್ನು ಹುಳಿರಸದಿಂದ ತುಂಬಿಸಿ ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವದಕ್ಕೆ ಕೊಟ್ಟನು.

27:49b.MAT.027.049 ಉಳಿದವ ರು--ಇರಲಿ ಬಿಡು, ಎಲೀಯನು ಬಂದು ಇವನನ್ನು ರಕ್ಷಿಸುವನೇನೋ ನಾವು ನೋಡೋಣ ಅಂದರು.

27:50b.MAT.027.050 ಯೇಸು ತಿರಿಗಿ ಮಹಾಶಬ್ದದಿಂದ ಕೂಗಿ ಆತ್ಮವನ್ನು ಒಪ್ಪಿಸಿಕೊಟ್ಟನು.

27:51b.MAT.027.051 ಆಗ ಇಗೋ, ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೆ ಹರಿದು ಎರಡು ಭಾಗವಾಯಿತು; ಭೂಮಿಯು ಕಂಪಿಸಿತು; ಮತ್ತು ಬಂಡೆ ಗಳು ಸೀಳಿದವು;

27:52b.MAT.027.052 ಇದಲ್ಲದೆ ಸಮಾಧಿಗಳು ತೆರೆಯಲ್ಪಟ್ಟವು; ಮತ್ತು ನಿದ್ರೆಹೋದ ಅನೇಕ ಭಕ್ತರ ದೇಹಗಳು ಎದ್ದವು.

27:53b.MAT.027.053 ಆತನು ಪುನರುತ್ಥಾ ನವಾದ ಮೇಲೆ ಅವರು ಸಮಾಧಿಗಳೊಳಗಿಂದ ಹೊರಗೆ ಬಂದು ಪರಿಶುದ್ಧ ಪಟ್ಟಣದೊಳಕ್ಕೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು.

27:54b.MAT.027.054 ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಬೇರೆ ಸಂಭವಗಳು ನಡೆದದ್ದನ್ನೂ ನೋಡಿ ಬಹಳವಾಗಿ ಭಯಪಟ್ಟು-- ನಿಜವಾಗಿಯೂ ಈತನು ದೇವಕುಮಾರನಾಗಿದ್ದನು ಅಂದರು

27:55b.MAT.027.055 ಯೇಸುವನ್ನು ಗಲಿಲಾಯದಿಂದ ಹಿಂಬಾಲಿಸಿ ಆತನಿಗೆ ಸೇವೆ ಮಾಡಿದ ಅನೇಕ ಸ್ತ್ರೀಯರು ದೂರದಿಂದ ನೋಡುತ್ತಿದ್ದರು.

27:56b.MAT.027.056 ಅವರಲ್ಲಿ ಮಗ್ದಲದ ಮರಿಯಳು ಯಾಕೋಬ ಮತ್ತು ಯೋಸೇಯ ಇವರ ತಾಯಿಯಾದ ಮರಿಯಳು ಮತ್ತು ಜೆಬೆದಾಯನ ಮಕ್ಕಳ ತಾಯಿಯು ಇದ್ದರು.

27:57b.MAT.027.057 ಸಾಯಂಕಾಲವಾದಾಗ ಅರಿಮಥಾಯದ ವನಾದ ಯೋಸೇಫನೆಂಬ ಹೆಸರುಳ್ಳ ಐಶ್ವರ್ಯವಂತ ನಾದ ಒಬ್ಬ ಮನುಷ್ಯನು ಅಲ್ಲಿಗೆ ಬಂದನು. ಅವನು ಸಹ ಯೇಸುವಿನ ಶಿಷ್ಯನಾಗಿದ್ದನು.

27:58b.MAT.027.058 ಅವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹಕ್ಕಾಗಿ ಬೇಡಿಕೊಂಡನು. ಆಗ ಪಿಲಾತನು ಆ ದೇಹವನ್ನು (ಅವನಿಗೆ) ಒಪ್ಪಿಸುವದಕ್ಕೆ ಅಪ್ಪಣೆಕೊಟ್ಟನು.

27:59b.MAT.027.059 ಯೋಸೇಫನು ಆ ದೇಹವನ್ನು ತಕ್ಕೊಂಡ ಮೇಲೆ ಅದನ್ನು ಶುದ್ಧವಾದ ನಾರುಮಡಿ ಬಟ್ಟೆಯಲ್ಲಿ ಸುತಿ

27:60b.MAT.027.060 ಬಂಡೆಯಲ್ಲಿ ತಾನು ತೋಡಿದ್ದ ತನ್ನ ಹೊಸ ಸಮಾಧಿಯಲ್ಲಿ ಅದನ್ನು ಇಟ್ಟು ಆ ಸಮಾಧಿಯ ಬಾಗಲಿಗೆ ದೊಡ್ಡದೊಂದು ಕಲ್ಲನ್ನು ಉರುಳಿಸಿ ಹೊರಟುಹೋದನು.

27:61b.MAT.027.061 ಅಲ್ಲಿ ಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಆ ಸಮಾಧಿಗೆ ಎದುರಾಗಿ ಕೂತುಕೊಂಡಿದ್ದರು.

27:62b.MAT.027.062 ಮರುದಿನ ಅಂದರೆ ಸೌರಣೆಯ ದಿನ ಕಳೆದ ಮೇಲೆ ಪ್ರಧಾನಯಾಜಕರು ಮತ್ತು ಫರಿಸಾಯರು ಒಟ್ಟಾಗಿ ಪಿಲಾತನ ಬಳಿಗೆ ಬಂದು--

27:63b.MAT.027.063 ಅಯ್ಯಾ, ಆ ಮೋಸಗಾರನು ಇನ್ನೂ ಜೀವದಿಂದಿದ್ದಾಗ-- ಮೂರು ದಿನಗಳಾದ ಮೇಲೆ ನಾನು ತಿರಿಗಿ ಏಳುತ್ತೇನೆ ಎಂದು ಹೇಳಿದ್ದು ನಮ್ಮ ನೆನಪಿಗೆ ಬರುತ್ತದೆ.

27:64b.MAT.027.064 ಅವನ ಶಿಷ್ಯರು ರಾತ್ರಿಯಲ್ಲಿ ಬಂದು ಅವನನ್ನು ಕದ್ದುಕೊಂಡು ಹೋಗಿ--ಅವನು ಸತ್ತವರೊ ಳಗಿಂದ ಎದ್ದಿದ್ದಾನೆ ಎಂದು ಜನರಿಗೆ ಹೇಳಿದರೆ ಕೊನೆಯ ತಪ್ಪು ಮೊದಲನೆಯದಕ್ಕಿಂತಲೂ ಕೆಟ್ಟದ್ದಾಗು ವದು. ಆದಕಾರಣ ಮೂರನೆಯ ದಿನದ ವರೆಗೆ ಸಮಾಧಿಯನ್ನು ಭದ್ರಪಡಿಸುವಂತೆ ಅಪ್ಪಣೆ ಕೊಡ ಬೇಕು ಅಂ

27:65b.MAT.027.065 ಪಿಲಾತನು ಅವರಿಗೆ--ಕಾವಲು ಗಾರರು ನಿಮಗೆ ಇದ್ದಾರಲ್ಲಾ, ನೀವು ಹೋಗಿ ನಿಮಗೆ ಸಾಧ್ಯವಾದ ಮಟ್ಟಿಗೆ ಅದನ್ನು ಭದ್ರಪಡಿಸಿರಿ ಅಂದನು.ಅವರು ಹೋಗಿ ಸಮಾಧಿಯನ್ನು ಭದ್ರಪಡಿಸಿ ಕಲ್ಲಿಗೆ ಮುದ್ರೆಹಾಕಿ ಕಾವಲನ್ನು ಇಟ್ಟರು.

27:66b.MAT.027.066 ಅವರು ಹೋಗಿ ಸಮಾಧಿಯನ್ನು ಭದ್ರಪಡಿಸಿ ಕಲ್ಲಿಗೆ ಮುದ್ರೆಹಾಕಿ ಕಾವಲನ್ನು ಇಟ್ಟರು.

28

28:1b.MAT.028.001 ಸಬ್ಬತ್ತಿನ ಕೊನೆಯಲ್ಲಿ ವಾರದ ಮೊದಲ ನೆಯ ದಿನವು ಉದಯವಾಗುತ್ತಿದ್ದಾಗಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಸಮಾಧಿಯನ್ನು ನೋಡಲು ಬಂದರು.

28:2b.MAT.028.002 ಮತ್ತು ಇಗೋ, ಅಲ್ಲಿ ಮಹಾಭೂಕಂಪ ಉಂಟಾಯಿತು; ಯಾಕಂದರೆ ಕರ್ತನ ದೂತನು ಪರಲೋಕದಿಂದ ಇಳಿದು ಬಂದು ಬಾಗಲಿನಿಂದ ಕಲ್ಲನ್ನು ಉರುಳಿಸಿ ಅದರ ಮೇಲೆ ಕೂತುಕೊಂಡನು.

28:3b.MAT.028.003 ಅವನ ಮುಖವು ಮಿಂಚಿನಂತೆಯೂ ಅವನ ಉಡುಪು ಹಿಮದಂತೆಯೂ ಬಿಳುಪಾಗಿತ್ತು.

28:4b.MAT.028.004 ಕಾವಲುಗಾರರು ಅವನಿಗೆ ಭಯಪಟ್ಟು ನಡುಗುತ್ತಾ ಸತ್ತವರ ಹಾಗಾದರು.

28:5b.MAT.028.005 ಆ ದೂತನು ಸ್ತ್ರೀಯರಿಗೆ-- ನೀವು ಭಯಪಡಬೇಡಿರಿ; ಯಾಕಂದರೆ ಶಿಲುಬೆಗೆ ಹಾಕಲ್ಪಟ್ಟವನಾದ ಯೇಸುವನ್ನು ನೀವು ಹುಡುಕುತ್ತೀರೆಂದು ನಾನು ಬಲ್ಲೆನು.

28:6b.MAT.028.006 ಆತನು ಇಲ್ಲಿ ಇಲ್ಲ; ಯಾಕಂದರೆ ಆತನು ಹೇಳಿರುವ ಪ್ರಕಾರ ಆತನು ಎದ್ದಿದ್ದಾನೆ; ಕರ್ತನು ಮಲಗಿದ್ದ ಸ್ಥಳವನ್ನು ಬಂದು ನೋಡಿರಿ.

28:7b.MAT.028.007 ಬೇಗನೆ ಹೋಗಿ ಆತನು ಸತ್ತವರೊಳಗಿಂದ ಎದ್ದಿದ್ದಾನೆ ಎಂದು ಆತನ ಶಿಷ್ಯರಿಗೆ ಹೇಳಿರಿ; ಮತ್ತು ಇಗೋ, ನಿಮಗೆ ಮುಂದಾಗಿ ಆತನು ಗಲಿಲಾಯಕ್ಕೆ ಹೋಗುತ್ತಾನೆ. ನೀವು ಆತನನ್ನು ಅಲ್ಲಿ ಕಾಣುವಿರಿ; ಇಗೋ, ನಾನು ನಿಮಗೆ ಹೇಳಿದ್ದೇನೆ ಅಂದನು.

28:8b.MAT.028.008 ಅವರು ಭಯದಿಂದಲೂ ಮಹಾ ಸಂತೋಷದಿಂದಲೂ ಸಮಾಧಿಯಿಂದ ಬೇಗನೆ ಹೊರಟು ಆತನ ಶಿಷ್ಯರಿಗೆ ತಿಳಿಸುವದಕ್ಕಾಗಿ ಓಡಿಹೋದರು.

28:9b.MAT.028.009 ಅವರು ಆತನ ಶಿಷ್ಯರಿಗೆ ತಿಳಿಸು ವದಕ್ಕೆ ಹೋಗುತ್ತಿದ್ದಾಗ ಇಗೋ, ಯೇಸು ಅವರನ್ನು ಸಂಧಿಸಿ--ಶುಭವಾಗಲಿ ಅಂದನು. ಆಗ ಅವರು ಬಂದು ಆತನ ಪಾದಗಳನ್ನು ಹಿಡಿದು ಆತನನ್ನು ಆರಾಧಿಸಿದರು.

28:10b.MAT.028.010 ಆಗ ಯೇಸು ಅವರಿಗೆ-- ಭಯ ಪಡಬೇಡಿರಿ; ನನ್ನ ಸಹೋದರರು ಗಲಿಲಾಯಕ್ಕೆ ಹೋಗಬೇಕೆಂದೂ ಅಲ್ಲಿ ಅವರು ನನ್ನನ್ನು ಕಾಣುವ ರೆಂದೂ ಹೋಗಿ ಅವರಿಗೆ ಹೇಳಿರಿ ಅಂದನು.

28:11b.MAT.028.011 ಅವರು ಹೋಗುತ್ತಿರುವಾಗ ಇಗೋ, ಕಾವಲುಗಾರರಲ್ಲಿ ಕೆಲವರು ಪಟ್ಟಣದೊಳಕ್ಕೆ ಬಂದು ಪ್ರಧಾನ ಯಾಜಕರಿಗೆ ನಡೆದ ಸಂಗತಿಗಳನ್ನೆಲ್ಲಾ ಹೇಳಿದರು.

28:12b.MAT.028.012 ಮತ್ತು ಇವರು ಹಿರಿಯರೊಂದಿಗೆ ಕೂಡಿಬಂದು ಆಲೋಚನೆ ಮಾಡಿ ಸೈನಿಕರಿಗೆ ಬಹಳ ಹಣಕೊಟ್ಟು --

28:13b.MAT.028.013 ನಾವು ನಿದ್ರೆ ಮಾಡುತ್ತಿರುವಾಗ ಆತನ ಶಿಷ್ಯರು ರಾತ್ರಿಯಲ್ಲಿ ಬಂದು ಅವನನ್ನು ಕದ್ದು ಕೊಂಡುಹೋದ ರೆಂದು ನೀವು ಹೇಳಿರಿ;

28:14b.MAT.028.014 ಇದನ್ನು ಅಧಿಪತಿಯು ಕೇಳಿಸಿಕೊಂಡರೆ ನಿಮ್ಮನ್ನು ತಪ್ಪಿಸುವ ಹಾಗೆ ನಾವು ಅವನನ್ನು ಒಡಂಬಡಿಸುವೆವು ಅಂದರು.

28:15b.MAT.028.015 ಹೀಗೆ ಅವರು ಆ ಹಣವನ್ನು ತಕ್ಕೊಂಡು ತಮಗೆ ಕಲಿಸಿದ ಹಾಗೆ ಮಾಡಿದರು. ಈ ಮಾತು ಸಾಧಾರಣವಾಗಿ ಈ ದಿನದ ವರೆಗೂ ಯೆಹೂದ್ಯರ ಮಧ್ಯದಲ್ಲಿ ಹರಡಿ ಕೊಂಡಿದೆ.

28:16b.MAT.028.016 ಆಗ ಯೇಸು ತಮಗೆ ನೇಮಿಸಿದ ಗಲಿಲಾಯ ದಲ್ಲಿರುವ ಬೆಟ್ಟಕ್ಕೆ ಹನ್ನೊಂದು ಮಂದಿ ಶಿಷ್ಯರು ಹೋದರು.

28:17b.MAT.028.017 ಅವರು ಆತನನ್ನು ನೋಡಿ ಆತನನ್ನು ಆರಾಧಿಸಿದರು; ಆದರೆ ಕೆಲವರು ಸಂದೇಹ ಪಟ್ಟರು.

28:18b.MAT.028.018 ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ;

28:19b.MAT.028.019 ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್‌.

28:20b.MAT.028.020 ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್‌.


Holder of rights
Multilingual Bible Corpus

Citation Suggestion for this Object
TextGrid Repository (2025). Kannada Collection. Matthew (Kannada). Matthew (Kannada). Multilingual Parallel Bible Corpus. Multilingual Bible Corpus. https://hdl.handle.net/21.11113/0000-0016-A1E6-E