Luke (Kannada)
1
1:1b.LUK.001.001 ನಮ್ಮಲ್ಲಿ ಬಹು ನಿಶ್ಚಯವಾಗಿ ನಂಬಿ ಕೊಂಡಿರುವ ವಿಷಯಗಳ ಪ್ರಕಟನೆಯನ್ನು ಕ್ರಮವಾಗಿ ಬರೆಯುವದಕ್ಕೆ ಅನೇಕರು ಕೈಕೊಂಡು
1:2b.LUK.001.002 ಮೊದಲಿನಿಂದಲೂ ಕಣ್ಣಾರೆ ಕಂಡ ಸಾಕ್ಷಿಗಳು ಮತ್ತು ವಾಕ್ಯಪರಿಚಾರಕರು ಅವುಗಳನ್ನು ನಮಗೆ ಒಪ್ಪಿಸಿಕೊ ಟ್ಟದ್ದರಿಂದ
1:3b.LUK.001.003 ಅತ್ಯುತ್ತಮನಾದ ಥೆಯೊಫಿಲನೇ, ಮೊದಲಿ ನಿಂದಲೂ ಎಲ್ಲವುಗಳನ್ನು ಪೂರ್ಣವಾಗಿ ತಿಳಿದುಕೊಂಡಿ ರುವ ನಾನು ಸಹ ಅವುಗಳನ್ನು ಕ್ರಮವಾಗಿ ನಿನಗೆ ಬರೆಯುವದು ಒಳ್ಳೇದೆಂದು ನನಗೆ ತೋಚಿತು;
1:4b.LUK.001.004 ಹೀಗೆ ನಿನಗೆ ಬೋಧಿಸಲ್ಪಟ್ಟವುಗಳು ಸ್ಥಿರವಾದವುಗಳೆಂದು ಇದರಿಂದ ನೀನು ತಿಳಿಯಬಹುದು.
1:5b.LUK.001.005 ಯೂದಾಯದ ಅರಸನಾದ ಹೆರೋದನ ದಿನ ಗಳಲ್ಲಿ ಅಬೀಯನ ವರ್ಗಕ್ಕೆ ಸೇರಿದ ಜಕರಿಯನೆಂದು ಹೆಸರಿದ್ದ ಒಬ್ಬ ಯಾಜಕನಿದ್ದನು. ಅವನ ಹೆಂಡತಿಯು ಆರೋನನ ಕುಮಾರ್ತೆಯರಿಗೆ ಸಂಬಂಧಪಟ್ಟವಳು. ಆಕೆಯ ಹೆಸರು ಎಲಿಸಬೇತ್.
1:6b.LUK.001.006 ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನ್ಯಾಯವಿಧಿಗಳನ್ನು ತಪ್ಪಿಲ್ಲದೆ ಕೈಕೊಂಡು ದೇವರ ಮುಂದೆ ನೀತಿವಂತರಾಗಿದ್ದರು.
1:7b.LUK.001.007 ಎಲಿಸಬೇತಳು ಬಂಜೆಯಾದದರಿಂದ ಅವರಿಗೆ ಮಕ್ಕ ಳಿರಲಿಲ್ಲ; ಅವರಿಬ್ಬರೂ ಬಹಳ ಪ್ರಾಯಹೋದವರಾ ಗಿದ್ದರು.
1:8b.LUK.001.008 ಹೀಗಿರಲಾಗಿ ಅವನು ತನ್ನ ವರ್ಗದ ಸರತಿಯ ಮೇರೆಗೆ ದೇವರ ಮುಂದೆ ಯಾಜಕನ ಉದ್ಯೋಗವನ್ನು ಮಾಡುತ್ತಿದ್ದಾಗ
1:9b.LUK.001.009 ಯಾಜಕೋದ್ಯೋಗದ ಪದ್ಧತಿಯ ಪ್ರಕಾರ ಅವನು ಕರ್ತನ ಆಲಯದಲ್ಲಿ ಪ್ರವೇಶಿಸಿ ಧೂಪವನ್ನು ಸುಡುವದು ಅವನ ಪಾಲಿಗೆ ಬಂತು.
1:10b.LUK.001.010 ಧೂಪಾರ್ಪಣೆಯ ಸಮಯದಲ್ಲಿ ಜನ ಸಮೂಹ ವೆಲ್ಲಾ ಹೊರಗೆ ಪ್ರಾರ್ಥಿಸುತ್ತಿದ್ದರು.
1:11b.LUK.001.011 ಆಗ ಧೂಪ ವೇದಿಯ ಬಲಗಡೆಯಲ್ಲಿ ನಿಂತುಕೊಂಡಿದ್ದ ಕರ್ತನ ದೂತನು ಅವನಿಗೆ ಕಾಣಿಸಿಕೊಂಡನು.
1:12b.LUK.001.012 ಜಕರೀ ಯನು ಅವನನ್ನು ನೋಡಿ ಕಳವಳದಿಂದ ಭಯಹಿಡಿ ದವನಾದನು.
1:13b.LUK.001.013 ಆದರೆ ಆ ದೂತನು ಅವನಿಗೆ--ಜಕರೀಯನೇ, ಭಯಪಡಬೇಡ; ಯಾಕಂದರೆ ನಿನ್ನ ಪ್ರಾರ್ಥನೆಯು ಕೇಳಲ್ಪಟ್ಟಿದೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನನ್ನು ಯೋಹಾನನೆಂದು ಕರೆಯಬೇಕು.
1:14b.LUK.001.014 ನಿನಗೆ ಆನಂದವೂ ಉಲ್ಲಾಸವೂ ಆಗುವದು; ಅನೇಕರು ಅವನ ಜನನದಲ್ಲಿ ಆನಂದಿಸುವರು.
1:15b.LUK.001.015 ಯಾಕಂದರೆ ಅವನು ಕರ್ತನ ದೃಷ್ಟಿಯಲ್ಲಿ ದೊಡ್ಡವ ನಾಗಿದ್ದು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿ ಯುವದೇ ಇಲ್ಲ; ಅವನು ತಾಯಿಯ ಗರ್ಭದಿಂದಲೇ ಪರಿಶುದ್ಧಾತ್ಮಭರಿತನಾಗಿರುವನು.
1:16b.LUK.001.016 ಅವನು ಇಸ್ರಾ ಯೇಲಿನ ಮಕ್ಕಳಲ್ಲಿ ಅನೇಕರನ್ನು ಅವರ ದೇವರಾದ ಕರ್ತನ ಕಡೆಗೆ ತಿರುಗಿಸುವನು.
1:17b.LUK.001.017 ಅವನು ತಂದೆಗಳ ಹೃದಯಗಳನ್ನು ಮಕ್ಕಳಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನಕ್ಕೂ ತಿರುಗಿಸಿ ಕರ್ತನಿಗೋಸ್ಕರ ಜನರನ್ನು ಸಿದ್ಧಮಾಡುವದಕ್ಕೆ ಎಲೀಯನ ಆತ್ಮದಲ್ಲಿ ಯೂ ಬಲದಲ್ಲಿಯೂ ಆತನ ಮುಂದೆ ಹೋಗುವನು ಎಂದು ಹೇಳಿದನು.
1:18b.LUK.001.018 ಆಗ ಜಕರೀಯನು ಆ ದೂತನಿಗೆ--ಇದನ್ನು ನಾನು ಯಾವದರಿಂದ ತಿಳು ಕೊಳ್ಳಲಿ? ಯಾಕಂದರೆ ನಾನು ಮುದುಕನು; ನನ್ನ ಹೆಂಡತಿಯೂ ಪ್ರಾಯಗತಿಸಿದವಳು ಅಂದನು.
1:19b.LUK.001.019 ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ--ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು, ಈಗ ನಿನ್ನ ಸಂಗಡ ಮಾತನಾಡುವದಕ್ಕೂ ಈ ಸಂತೋಷದ ವರ್ತಮಾನವನ್ನು ನಿನಗೆ ತಿಳಿಸುವದಕ್ಕೂ ಕಳುಹಿಸ ಲ್ಪಟ್ಟಿದ್ದೇನೆ.
1:20b.LUK.001.020 ಇಗೋ, ತಕ್ಕ ಕಾಲದಲ್ಲಿ ನೆರವೇರುವ ನನ್ನ ಮಾತುಗಳನ್ನು ನೀನು ನಂಬದೆ ಹೋದದರಿಂದ ಈ ಸಂಗತಿಗಳು ಈಡೇರುವ ದಿನದ ವರೆಗೆ ನೀನು ಮೂಕನಾಗಿದ್ದು ಮಾತನಾಡಲಾರದೆ ಇರುವಿ ಅಂದನು.
1:21b.LUK.001.021 ಆಗ ಜಕರೀಯನಿಗಾಗಿ ಕಾದುಕೊಂಡಿದ್ದ ಜನರು ಅವನು ದೇವಾಲಯದಲ್ಲಿ ಬಹಳ ತಡಮಾಡಿದ್ದಕ್ಕೆ ಆಶ್ಚರ್ಯಪಟ್ಟರು.
1:22b.LUK.001.022 ಅವನು ಹೊರಗೆ ಬಂದಾಗ ಅವರೊಂದಿಗೆ ಮಾತನಾಡಲಾರದೆ ಇದ್ದನು; ಅದಕ್ಕ ವರು ಅವನು ದೇವಾಲಯದಲ್ಲಿ ಒಂದು ದರ್ಶನವನ್ನು ಕಂಡನೆಂದು ಗ್ರಹಿಸಿದರು; ಯಾಕಂದರೆ ಅವನು ಅವರಿಗೆ ಸನ್ನೆ ಮಾಡುತ್ತಾ ಮಾತಿಲ್ಲದವನಾಗಿದ್ದನು.
1:23b.LUK.001.023 ಇದಾದ ಮೇಲೆ ತನ್ನ ಸೇವೆಯ ದಿನಗಳು ಮುಗಿದ ಕೂಡಲೆ ಅವನು ತನ್ನ ಸ್ವಂತ ಮನೆಗೆ ಹೊರಟು ಹೋದನು.
1:24b.LUK.001.024 ಆ ದಿವಸಗಳಾದ ಮೇಲೆ ಅವನ ಹೆಂಡತಿಯಾದ ಎಲಿಸಬೇತಳು ಗರ್ಭಿಣಿಯಾಗಿ ಐದು ತಿಂಗಳು ತನ್ನನ್ನು ಮರೆಮಾಡಿಕೊಂಡು--
1:25b.LUK.001.025 ಜನರಲ್ಲಿ ನನಗಿದ್ದ ಅವ ಮಾನವನ್ನು ತೆಗೆದುಹಾಕುವದಕ್ಕಾಗಿ ಕರ್ತನು ನನ್ನ ಮೇಲೆ ದೃಷ್ಟಿಯಿಟ್ಟ ದಿನಗಳಲ್ಲಿ ನನಗೆ ಹೀಗೆ ಮಾಡಿದನು ಎಂದು ಹೇಳಿದಳು.
1:26b.LUK.001.026 ಆರನೆಯ ತಿಂಗಳಿನಲ್ಲಿ ಗಲಿಲಾಯ ಪಟ್ಟಣದ ನಜರೇತೆಂಬ ಊರಿಗೆ ದೇವರಿಂದ ಗಬ್ರಿಯೇಲನೆಂಬ ದೂತನು
1:27b.LUK.001.027 ದಾವೀದನ ಮನೆತನದವನಾದ ಯೋಸೇ ಫನಿಗೆ ನಿಶ್ಚಯಮಾಡಲ್ಪಟ್ಟ ಮರಿಯಳೆಂಬ ಒಬ್ಬ ಕನ್ಯೆಯ ಬಳಿಗೆ ಕಳುಹಿಸಲ್ಪಟ್ಟನು.
1:28b.LUK.001.028 ಆ ದೂತನು ಆಕೆಗೆ--ಅಪಾರ ದಯೆ ಹೊಂದಿದವಳೇ, ನಿನಗೆ ವಂದನೆ; ಕರ್ತನು ನಿನ್ನೊಂದಿಗಿದ್ದಾನೆ; ಸ್ತ್ರೀಯರಲ್ಲಿ ನೀನು ಧನ್ಯಳೇ ಎಂದು ಹೇಳಿದನು.
1:29b.LUK.001.029 ಆಕೆಯು ಅವನನ್ನು ನೋಡಿ ಅವನ ಮಾತಿಗೆ ಕಳವಳಗೊಂಡು ಇದು ಎಂಥಾತರವಾದ ವಂದನೆ ಎಂದು ತನ್ನ ಮನದಲ್ಲಿ ಯೋಚಿಸುತ್ತಿರುವಾಗ
1:30b.LUK.001.030 ಆ ದೂತನು ಆಕೆಗೆ-- ಮರಿಯಳೇ, ಹೆದರಬೇಡ; ಯಾಕಂದರೆ ನೀನು ದೇವರ ದಯೆಯನ್ನು ಹೊಂದಿದ್ದೀ;
1:31b.LUK.001.031 ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸು ಎಂದು ಹೆಸರಿಡಬೇಕು.
1:32b.LUK.001.032 ಆತನು ದೊಡ್ಡವನಾಗಿದ್ದು ಮಹೋನ್ನತನ ಕುಮಾರನೆಂದು ಕರೆಯಲ್ಪಡುವನು; ದೇವರಾದ ಕರ್ತನು ಆತನ ತಂದೆ ಯಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡು ವನು.
1:33b.LUK.001.033 ಆತನು ಯಾಕೋಬನ ಮನೆತನವನ್ನು ಸದಾ ಕಾಲವೂ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇಲ್ಲ ಎಂದು ಹೇಳಿದನು.
1:34b.LUK.001.034 ಆಗ ಮರಿಯಳು ಆ ದೂತ ನಿಗೆ--ಇದು ಹೇಗಾದೀತು? ನಾನು ಪುರುಷನನ್ನು ಅರಿತವಳಲ್ಲವಲ್ಲಾ ಅಂದಳು.
1:35b.LUK.001.035 ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ ಆಕೆಗೆ--ಪವಿತ್ರಾತ್ಮನು ನಿನ್ನ ಮೇಲೆ ಬರುವನು, ಮಹೋನ್ನತನ ಶಕ್ತಿಯು ನಿನ್ನನ್ನು ಆವರಿಸಿ ಕೊಳ್ಳುವದು; ಆದದರಿಂದ ನಿನ್ನಿಂದ ಹುಟ್ಟುವ ಆ ಪವಿತ್ರವಾದ ಶಿಶುವು ದೇವರ ಮಗನೆಂದು ಕರೆಯ ಲ್ಪಡುವನು.
1:36b.LUK.001.036 ಇಗೋ, ಬಂಜೆಯೆಂದು ಕರೆಯಲ್ಪಟ್ಟ ನಿನ್ನ ಬಂಧುವಾದ ಎಲಿಸಬೇತಳು ಸಹ ತನ್ನ ಮುಪ್ಪಿನ ಪ್ರಾಯದಲ್ಲಿ ಮಗನನ್ನು ಗರ್ಭಧರಿಸಿದ್ದಾಳೆ. ಆಕೆಗೆ ಇದು ಆರನೆಯ ತಿಂಗಳು.
1:37b.LUK.001.037 ಯಾಕಂದರೆ ದೇವರಿಗೆ ಅಸಾಧ್ಯವಾದದ್ದು ಯಾವದೂ ಇಲ್ಲ ಎಂದು ಹೇಳಿ ದನು.
1:38b.LUK.001.038 ಆಗ ಮರಿಯಳು--ನೋಡು, ನಾನು ಕರ್ತನ ದಾಸಿ; ನಿನ್ನ ಮಾತಿನಂತೆ ನನಗೆ ಆಗಲಿ ಅಂದಳು; ಆ ದೂತನು ಆಕೆಯ ಬಳಿಯಿಂದ ಹೊರಟುಹೋದನು.
1:39b.LUK.001.039 ಆ ದಿವಸಗಳಲ್ಲಿ ಮರಿಯಳು ಎದ್ದು ಬೆಟ್ಟದ ಸೀಮೆಯ ಯೆಹೂದದ ಪಟ್ಟಣಕ್ಕೆ ಅವಸರದಿಂದ ಹೋಗಿ
1:40b.LUK.001.040 ಜಕರೀಯನ ಮನೆಯನ್ನು ಪ್ರವೇಶಿಸಿ ಎಲಿಸಬೇತಳನ್ನು ವಂದಿಸಿದಳು.
1:41b.LUK.001.041 ಎಲಿಸಬೇತಳು ಮರಿಯಳ ವಂದನೆಯನ್ನು ಕೇಳಿದಾಗ ಅವಳ ಗರ್ಭ ದಲ್ಲಿದ್ದ ಕೂಸು ಹಾರಾಡಿತು; ಎಲಿಸಬೇತಳು ಪರಿಶುದ್ಧಾ ತ್ಮಭರಿತಳಾಗಿ
1:42b.LUK.001.042 ಗಟ್ಟಿಯಾದ ಧ್ವನಿಯಿಂದ ಮಾತ ನಾಡಿ--ಸ್ತ್ರೀಯರಲ್ಲಿ ನೀನು ಧನ್ಯಳೇ; ನಿನ್ನ ಗರ್ಭಫಲವು ಆಶೀರ್ವದಿಸಲ್ಪಟ್ಟದ್ದೇ.
1:43b.LUK.001.043 ನನ್ನ ಕರ್ತನ ತಾಯಿಯು ನನ್ನ ಬಳಿಗೆ ಬರುವದು ನನಗೆಲ್ಲಿಂದಾಯಿತು?
1:44b.LUK.001.044 ಇಗೋ, ನಿನ್ನ ವಂದನೆಯ ಧ್ವನಿಯು ನನ್ನ ಕಿವಿ ಗಳಲ್ಲಿ ಬಿದ್ದ ಕೂಡಲೆ ಕೂಸು ನನ್ನ ಗರ್ಭದಲ್ಲಿ ಉಲ್ಲಾಸದಿಂದ ಹಾರಾಡಿತು.
1:45b.LUK.001.045 ಕರ್ತನಿಂದ ತನಗೆ ಹೇಳಲ್ಪಟ್ಟವುಗಳು ನೆರವೇರುವವೆಂದು ನಂಬಿದವಳು ಧನ್ಯಳು ಎಂದು ಹೇಳಿದಳು.
1:46b.LUK.001.046 ಆಗ ಮರಿಯಳು--ನನ್ನ ಪ್ರಾಣವು ಕರ್ತನನ್ನು ಘನಪಡಿಸುತ್ತದೆ;
1:47b.LUK.001.047 ನನ್ನ ಆತ್ಮವು ನನ್ನ ರಕ್ಷಕನಾದ ದೇವರಲ್ಲಿ ಉಲ್ಲಾಸಗೊಂಡಿದೆ;
1:48b.LUK.001.048 ಆತನು ತನ್ನ ದಾಸಿಯ ದೀನಸ್ಥಿತಿಯನ್ನು ಲಕ್ಷಿಸಿದ್ದಾನೆ. ಇಗೋ, ಇಂದಿನಿಂದ ತಲತಲಾಂತರಗಳವರು ನನ್ನನ್ನು ಧನ್ಯಳೆಂದು ಕರೆಯುವರು.
1:49b.LUK.001.049 ಪರಾಕ್ರಮಿಯಾದಾತನು ನನಗೆ ಮಹತ್ತಾದವುಗಳನ್ನು ಮಾಡಿದ್ದಾನೆ; ಆತನ ಹೆಸರು ಪರಿಶುದ್ಧವಾದದ್ದು.
1:50b.LUK.001.050 ಆತನಿಗೆ ಭಯಪಡು ವವರ ಮೇಲೆ ಆತನ ಕರುಣೆಯು ತಲತಲಾಂತರ ಗಳಿಗೂ ಇರುವದು.
1:51b.LUK.001.051 ಆತನು ತನ್ನ ಬಾಹುಬಲವನ್ನು ತೋರಿಸಿ ಗರ್ವಿಷ್ಠರನ್ನು ಅವರ ಹೃದಯದ ಕಲ್ಪನೆಗಳ ನಿಮಿತ್ತವಾಗಿ ಅವರನ್ನು ಚದರಿಸಿಬಿಟ್ಟಿದ್ದಾನೆ;
1:52b.LUK.001.052 ಬಲಿಷ್ಠ ರನ್ನು ಅವರ ಸ್ಥಾನಗಳಿಂದ ಕೆಳಗೆ ದೊಬ್ಬಿ ದೀನರನ್ನು ಮೇಲಕ್ಕೆ ಎತ್ತಿದ್ದಾನೆ.
1:53b.LUK.001.053 ಹಸಿದವರನ್ನು ಒಳ್ಳೆಯವು ಗಳಿಂದ ತೃಪ್ತಿಪಡಿಸಿ ಐಶ್ವರ್ಯವಂತರನ್ನು ಬರಿದಾಗಿ ಕಳುಹಿಸಿಬಿಟ್ಟಿದ್ದಾನೆ.
1:54b.LUK.001.054 ತನ್ನ ಕರುಣೆಯ ಜ್ಞಾಪಕಾರ್ಥ ವಾಗಿ ತನ್ನ ಸೇವಕನಾದ ಇಸ್ರಾಯೇಲನಿಗೆ ಸಹಾಯ ಮಾಡಿದ್ದಾನೆ.
1:55b.LUK.001.055 ಇದಲ್ಲದೆ ನಮ್ಮ ಪಿತೃಗಳಿಗೂ ಅಬ್ರ ಹಾಮನಿಗೂ ಅವನ ಸಂತತಿಗೂ ಸದಾಕಾಲಕ್ಕೆ ಆತನು ಹೇಳಿದಂತೆ ಮಾಡಿದ್ದಾನೆ ಅಂದಳು.
1:56b.LUK.001.056 ಮರಿ ಯಳು ಸುಮಾರು ಮೂರು ತಿಂಗಳು ಅವಳ ಜೊತೆ ಯಲ್ಲಿದ್ದು ತನ್ನ ಸ್ವಂತ ಮನೆಗೆ ಹಿಂದಿರುಗಿಹೋದಳು.
1:57b.LUK.001.057 ಇದಲ್ಲದೆ ಎಲಿಸಬೇತಳಿಗೆ ಹೆರಿಗೆಯ ಸಮಯವು ಪೂರ್ಣವಾದಾಗ ಆಕೆಯು ಒಬ್ಬ ಮಗನನ್ನು ಹೆತ್ತಳು.
1:58b.LUK.001.058 ಆಗ ಕರ್ತನು ತನ್ನ ಮಹಾಕರುಣೆಯನ್ನು ಆಕೆಯ ಮೇಲೆ ತೋರಿಸಿದ್ದನ್ನು ಆಕೆಯ ನೆರೆಹೊರೆಯವರೂ ಬಂಧುಗಳೂ ಕೇಳಿ ಆಕೆಯ ಕೂಡ ಸಂತೋಷಪಟ್ಟರು.
1:59b.LUK.001.059 ತರುವಾಯ ಅವರು ಎಂಟನೇ ದಿನದಲ್ಲಿ ಆ ಮಗುವಿಗೆ ಸುನ್ನತಿ ಮಾಡಿಸುವದಕ್ಕಾಗಿ ಬಂದು ಅವನ ತಂದೆಯ ಹೆಸರಿನಂತೆ ಅವನನ್ನು ಜಕರೀಯನೆಂದು ಕರೆದರು.
1:60b.LUK.001.060 ಅದಕ್ಕೆ ಅವನ ತಾಯಿಯು ಪ್ರತ್ಯುತ್ತರ ವಾಗಿ--ಹಾಗಲ್ಲ. ಅವನು ಯೋಹಾನನೆಂದು ಕರೆಯ ಲ್ಪಡಬೇಕು ಅಂದಳು.
1:61b.LUK.001.061 ಅದಕ್ಕವರು ಆಕೆಗೆ--ನಿನ್ನ ಬಂಧುಗಳಲ್ಲಿ ಈ ಹೆಸರಿನಿಂದ ಕರೆಯಲ್ಪಟ್ಟವರು ಒಬ್ಬರೂ ಇಲ್ಲ ಅಂದರು.
1:62b.LUK.001.062 ಅವನು ಯಾವ ಹೆಸರಿ ನಿಂದ ಕರೆಯಲ್ಪಡಬೇಕೆಂದು ಅವನ ತಂದೆಗೆ ಅವರು ಸನ್ನೆ ಮಾಡಿದರು.
1:63b.LUK.001.063 ಆಗ ಅವನು ಒಂದು ಬರೆಯುವ ಹಲಗೆಯನ್ನು ಕೇಳಿ ಅವನ ಹೆಸರು ಯೋಹಾನನು ಎಂದು ಬರೆದನು. ಆಗ ಅವರೆಲ್ಲರೂ ಆಶ್ಚರ್ಯಪಟ್ಟರು.
1:64b.LUK.001.064 ಕೂಡಲೆ ಅವನ ಬಾಯಿ ತೆರೆಯಲ್ಪಟ್ಟು ಅವನ ನಾಲಿಗೆಯು ಸಡಿಲವಾಯಿತು ಮತ್ತು ಅವನು ಮಾತ ನಾಡಿ ದೇವರನ್ನು ಕೊಂಡಾಡಿದನು.
1:65b.LUK.001.065 ಆಗ ಅವರ ಸುತ್ತಲೂ ಮತ್ತು ಎಲ್ಲಾ ಯೂದಾಯದ ಬೆಟ್ಟದ ಸೀಮೆಯಲ್ಲಿಯೂ ಈ ಸಂಗತಿಗಳೆಲ್ಲಾ ಹರಡಿದವು.
1:66b.LUK.001.066 ಕೇಳಿದವರೆಲ್ಲರೂ ಅವುಗಳನ್ನು ತಮ್ಮ ಹೃದಯದಲ್ಲಿ ಇಟ್ಟುಕೊಂಡು--ಈ ಕೂಸೂ ಎಂಥದ್ದಾಗುವನೊ ಎಂದು ಅಂದುಕೊಂಡರು. ಕರ್ತನ ಹಸ್ತವು ಅವನ ಸಂಗಡ ಇತ್ತು.
1:67b.LUK.001.067 ಅವನ ತಂದೆಯಾದ ಜಕರೀಯನು ಪವಿತ್ರಾತ್ಮ ಭರಿತನಾಗಿ ಪ್ರವಾದಿಸುತ್ತಾ--
1:68b.LUK.001.068 ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿ ಹೊಂದಲಿ, ಯಾಕಂದರೆ ಆತನು ತನ್ನ ಜನರನ್ನು ಸಂಧಿಸಿ ಅವರನ್ನು ವಿಮೋಚಿ ಸಿದ್ದಾನೆ.
1:69b.LUK.001.069 ಆತನು ತನ್ನ ಸೇವಕನಾದ ದಾವೀದನ ಮನೆತನದಲ್ಲಿ ನಮಗಾಗಿ ರಕ್ಷಣೆಯ ಕೊಂಬನ್ನು ಎತ್ತಿ ದ್ದಾನೆ.
1:70b.LUK.001.070 ಲೋಕಾದಿಯಿಂದ ಆತನು ತನ್ನ ಪರಿಶುದ್ಧ ಪ್ರವಾದಿಗಳ ಬಾಯಿಂದ ಮಾತನಾಡಿದ ಪ್ರಕಾರ
1:71b.LUK.001.071 ನಾವು ನಮ್ಮ ಶತ್ರುಗಳಿಂದಲೂ ನಮ್ಮನ್ನು ಹಗೆ ಮಾಡುವವರ ಕೈಯಿಂದಲೂ ರಕ್ಷಿಸಲ್ಪಡುವಂತೆ
1:72b.LUK.001.072 ನಮ್ಮ ಪಿತೃಗಳಿಗೆ ವಾಗ್ದಾನ ಮಾಡಿದ ಕರುಣೆಯನು ನೆರವೇರಿಸಲು ತನ್ನ ಪರಿಶುದ್ಧ ಒಡಂಬಡಿಕೆಯನ್ನು ನೆನಪಿಗೆ ತಂದು
1:73b.LUK.001.073 ನಮ್ಮ ಪಿತೃವಾದ ಅಬ್ರಹಾಮನಿಗೆ ಆಣೆಯಿಟ್ಟು ಪ್ರಮಾಣ ಮಾಡಿದಂತೆ
1:74b.LUK.001.074 ನಾವು ನಮ್ಮ ಶತ್ರುಗಳ ಕೈಯಿಂದ ಬಿಡಿಸಲ್ಪಟ್ಟು ಭಯವಿಲ್ಲದವರಾಗಿ
1:75b.LUK.001.075 ನಮ್ಮ ಜೀವಮಾನದ ಎಲ್ಲಾ ದಿನಗಳಲ್ಲಿ ಆತನ ಮುಂದೆ ಪರಿಶುದ್ಧತೆಯಿಂದಲೂ ನೀತಿಯಿಂದಲೂ ಆತನನ್ನು ಸೇವಿಸುವವರಾಗುವದಕ್ಕೆ ಆತನು ಅನುಗ್ರಹಿ ಸುವನು.
1:76b.LUK.001.076 ಇದಲ್ಲದೆ ಮಗುವೇ, ನೀನಾದರೋ ಮಹೋನ್ನತನ ಪ್ರವಾದಿ ಎಂದು ಕರೆಯಲ್ಪಡುವಿ; ಯಾಕಂದರೆ ಕರ್ತನ ಮಾರ್ಗಗಳನ್ನು ಸಿದ್ಧಮಾಡು ವದಕ್ಕೆ ಆತನ ಮುಂದೆ ಹೋಗುವಿ.
1:77b.LUK.001.077 ಹೇಗೆಂದರೆ ಆತನು ತನ್ನ ಜನರಿಗೆ ಪಾಪಗಳ ಪರಿಹಾರದಿಂದ ರಕ್ಷಣೆಯ ತಿಳುವಳಿಕೆಯನ್ನು ಕೊಡುವನು.
1:78b.LUK.001.078 ನಮ್ಮ ದೇವರ ಮಮತೆಯ ಕರುಣೆಯಿಂದ ಅದು ಆಗುವದ ಲ್ಲದೆ ಮೇಲಣದಿಂದ ಅರುಣೋದಯವು ಉಂಟಾಗಿ ನಮ್ಮನ್ನು ಸಂಧಿಸಿ
1:79b.LUK.001.079 ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ ಕೂತವರಿಗೆ ಬೆಳಕನ್ನು ಕೊಡುವದಕ್ಕೂ ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡಿಸುವದಕ್ಕೂ ಆಗುವದು ಎಂದು ಹೇಳಿದನು.ಆ ಬಾಲಕನು ಬೆಳೆದು ಆತ್ಮದಲ್ಲಿ ಬಲಗೊಂಡನು. ತನ್ನನ್ನು ಇಸ್ರಾಯೇಲಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.
1:80b.LUK.001.080 ಆ ಬಾಲಕನು ಬೆಳೆದು ಆತ್ಮದಲ್ಲಿ ಬಲಗೊಂಡನು. ತನ್ನನ್ನು ಇಸ್ರಾಯೇಲಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.
2
2:1b.LUK.002.001 ಆ ದಿನಗಳಲ್ಲಿ ಆದದ್ದೇನಂದರೆ ಲೋಕವೆಲ್ಲಾ ಖಾನೇಷುಮಾರಿ ಬರೆಯಿಸಿಕೊಳ್ಳಬೇಕೆಂದು ಕೈಸರನಾದ ಔಗುಸ್ತನಿಂದ ಆಜ್ಞೆಯು ಹೊರಟಿತು.
2:2b.LUK.002.002 ಕುರೇನ್ಯನು ಸಿರಿಯಾಕ್ಕೆ ಅಧಿಪತಿಯಾಗಿದ್ದಾಗ ಈ ಖಾನೇಷುಮಾರಿಯು ಮೊದಲನೆಯ ಸಾರಿ ನಡೆ ಯಿತು.
2:3b.LUK.002.003 ಆಗ ಎಲ್ಲರೂ ಖಾನೇಷುಮಾರಿ ಬರೆಯಿಸಿ ಕೊಳ್ಳುವದಕ್ಕಾಗಿ ತಮ್ಮ ತಮ್ಮ ಸ್ವಂತ ಪಟ್ಟಣಕ್ಕೆ ಹೋದರು.
2:4b.LUK.002.004 (ಯೋಸೇಫನು ದಾವೀದನ ಮನೆತನ ದವನೂ ವಂಶದವನೂ ಆಗಿದ್ದದರಿಂದ) ಅವನು ಸಹ ಗಲಿಲಾಯದ ನಜರೇತೆಂಬ ಪಟ್ಟಣದಿಂದ ಯೂದಾ ಯದಲ್ಲಿ ಬೇತ್ಲೆಹೇಮ್ ಎಂದು ಕರೆಯಲ್ಪಟ್ಟ ದಾವೀದನ ಪಟ್ಟಣಕ್ಕೆ
2:5b.LUK.002.005 ತನಗೆ ನಿಶ್ಚಯಮಾಡಲ್ಪಟ್ಟಿದ್ದ ಮತ್ತು ಪೂರ್ಣ ಗರ್ಭಿಣಿಯಾಗಿದ್ದ ಮರಿಯಳೊಂದಿಗೆ ಖಾನೇಷುಮಾರಿ ಬರೆಸಿಕೊಳ್ಳುವದಕ್ಕಾಗಿ ಹೋದನು.
2:6b.LUK.002.006 ಹೀಗೆ ಅವರು ಅಲ್ಲಿ ಇದ್ದಾಗ ಆಕೆಗೆ ಹೆರಿಗೆಯ ದಿವಸಗಳು ಪೂರ್ಣವಾದವು.
2:7b.LUK.002.007 ಆಕೆಯು ತನ್ನ ಚೊಚ್ಚಲು ಮಗನನ್ನು ಹೆತ್ತು ಬಟ್ಟೆಗಳಿಂದ ಸುತ್ತಿ ಛತ್ರದಲ್ಲಿ ಅವರಿಗೆ ಸ್ಥಳವಿಲ್ಲವಾದ್ದರಿಂದ ಆತನನ್ನು ಗೋದ ಲಿಯಲ್ಲಿ ಮಲಗಿಸಿದಳು.
2:8b.LUK.002.008 ಆಗ ಅದೇ ಸೀಮೆಯಲ್ಲಿ ಕುರುಬರು ಹೊಲದಲ್ಲಿದ್ದು ರಾತ್ರಿಯಲ್ಲಿ ತಮ್ಮ ಹಿಂಡನ್ನು ಕಾಯುತ್ತಿದ್ದರು.
2:9b.LUK.002.009 ಇಗೋ, ಕರ್ತನ ದೂತನು ಅವರ ಬಳಿಗೆ ಬಂದನು. ಆಗ ಕರ್ತನ ಮಹಿಮೆಯು ಅವರ ಸುತ್ತಮುತ್ತಲೂ ಪ್ರಕಾಶಿ ಸಿತು; ಆದದರಿಂದ ಅವರು ಬಹಳವಾಗಿ ಹೆದರಿದರು.
2:10b.LUK.002.010 ಆದರೆ ದೂತನು ಅವರಿಗೆ--ಹೆದರಬೇಡಿರಿ; ಯಾಕಂದರೆ ಇಗೋ, ಎಲ್ಲಾ ಜನರಿಗೆ ಮಹಾ ಸಂತೋಷವನ್ನುಂಟು ಮಾಡುವ ಒಳ್ಳೇಸಮಾಚಾರ ವನ್ನು ನಾನು ನಿಮಗೆ ತಿಳಿಯಪಡಿಸುತ್ತೇನೆ.
2:11b.LUK.002.011 ಈ ದಿನ ದಾವೀದನ ಪಟ್ಟಣದಲ್ಲಿ ನಿಮಗೋಸ್ಕರ ಒಬ್ಬ ರಕ್ಷಕನು ಹುಟ್ಟಿದ್ದಾನೆ; ಆತನು ಕರ್ತನಾಗಿರುವ ಕ್ರಿಸ್ತನೇ.
2:12b.LUK.002.012 ಆ ಶಿಶುವು ಬಟ್ಟೆಯಿಂದ ಸುತ್ತಲ್ಪಟ್ಟು ಗೋದಲಿಯಲ್ಲಿ ಮಲಗಿರುವದನ್ನು ನೀವು ಕಾಣುವಿರಿ; ಇದೇ ನಿಮಗೆ ಗುರುತು ಎಂದು ಹೇಳಿದನು.
2:13b.LUK.002.013 ಫಕ್ಕನೆ ಪರಲೋಕ ಸೈನ್ಯದ ಸಮೂಹವು ಆ ದೂತನ ಸಂಗಡ ಇದ್ದು ದೇವರನ್ನು ಕೊಂಡಾಡುತ್ತಾ--
2:14b.LUK.002.014 ಮಹೋನ್ನತ ದಲ್ಲಿರುವ ದೇವರಿಗೆ ಮಹಿಮೆ, ಭೂಮಿಯ ಮೇಲೆ ಸಮಾಧಾನ, ಮನುಷ್ಯರ ಕಡೆಗೆ ದಯೆ ಎಂದು ಹೇಳಿದರು.
2:15b.LUK.002.015 ದೂತನು ಅವರ ಬಳಿಯಿಂದ ಪರಲೋಕಕ್ಕೆ ಹೋದ ಮೇಲೆ ಕುರುಬರು--ಕರ್ತನು ನಮಗೆ ಪ್ರಕಟ ಮಾಡಿದ ಈ ಸಂಭವವನ್ನು ನಾವು ಈಗಲೇ ಬೇತ್ಲೆಹೇಮಿಗೆ ಹೋಗಿ ನೋಡೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
2:16b.LUK.002.016 ಅವರು ಅವಸರದಿಂದ ಬಂದು ಮರಿಯಳನ್ನೂ ಯೋಸೇಫ ನನ್ನೂ ಗೋದಲಿಯಲ್ಲಿ ಮಲಗಿದ್ದ ಶಿಶುವನ್ನೂ ಕಂಡುಕೊಂಡರು.
2:17b.LUK.002.017 ಅವರು ಆತನನ್ನು ನೋಡಿದ ಮೇಲೆ ಈ ಶಿಶುವಿನ ವಿಷಯವಾಗಿ ತಮಗೆ ತಿಳಿಯಪಡಿಸಿದ ಮಾತನ್ನು ಎಲ್ಲಾ ಕಡೆಯಲ್ಲಿಯೂ ಪ್ರಕಟಮಾಡಿದರು.
2:18b.LUK.002.018 ಕುರುಬರು ಹೇಳಿದ ವಿಷಯ ಗಳನ್ನು ಕೇಳಿದವರೆಲ್ಲರೂ ಆಶ್ಚರ್ಯಪಟ್ಟರು.
2:19b.LUK.002.019 ಆದರೆ ಮರಿಯಳು ಈ ಎಲ್ಲಾ ವಿಷಯಗಳನ್ನು ತನ್ನ ಹೃದಯದಲ್ಲಿಟ್ಟು ಕೊಂಡು ಆಲೋಚಿಸುತ್ತಿದ್ದಳು.
2:20b.LUK.002.020 ತಮಗೆ ತಿಳಿಸಲ್ಪಟ್ಟಂತೆ ಕುರುಬರು ತಾವು ಕೇಳಿದ್ದ ಮತ್ತು ನೋಡಿದ್ದ ಎಲ್ಲಾ ವಿಷಯಗಳಿಗಾಗಿ ದೇವರನ್ನು ಮಹಿಮೆಪಡಿಸುತ್ತಾ ಕೊಂಡಾಡುತ್ತಾ ಹಿಂದಿರುಗಿದರು.
2:21b.LUK.002.021 ಶಿಶುವಿಗೆ ಸುನ್ನತಿ ಮಾಡಿಸುವದಕ್ಕಾಗಿ ಎಂಟು ದಿನಗಳು ಕಳೆದ ಮೇಲೆ ಆತನನ್ನು ಗರ್ಭಧರಿಸು ವದಕ್ಕಿಂತ ಮುಂಚಿತವಾಗಿ ದೂತನು ಹೆಸರಿಟ್ಟಂತೆಯೇ ಆತನು ಯೇಸು ಎಂದು ಕರೆಯಲ್ಪಟ್ಟನು.
2:22b.LUK.002.022 ಮೋಶೆಯ ನ್ಯಾಯಪ್ರಮಾಣದ ಪ್ರಕಾರ ಆಕೆಯ ಶುದ್ಧೀಕರಣದ ದಿವಸಗಳು ಮುಗಿದ ಮೇಲೆ ಅವರು ಆತನನ್ನು ಕರ್ತನಿಗೆ ಸಮರ್ಪಿಸುವದಕ್ಕಾಗಿ ಯೆರೂಸಲೇಮಿಗೆ ತಂದರು.
2:23b.LUK.002.023 (ಕರ್ತನ ನ್ಯಾಯ ಪ್ರಮಾಣದಲ್ಲಿ ಬರೆದಿರುವಂತೆ--ಪ್ರತಿಯೊಂದು ಚೊಚ್ಚಲು ಗಂಡುಮಗು ಕರ್ತನಿಗೆ ಪರಿಶುದ್ಧವೆಂದು ಕರೆಯಲ್ಪಡಬೇಕು).
2:24b.LUK.002.024 ಕರ್ತನ ನ್ಯಾಯಪ್ರಮಾಣದಲ್ಲಿ ಹೇಳಿದಂತೆ ಒಂದು ಜೋಡಿ ಬೆಳವವನ್ನಾಗಲೀ ಎರಡು ಪಾರಿವಾಳದ ಮರಿಗಳನ್ನಾಗಲೀ ಯಜ್ಞಾರ್ಪಣೆ ಮಾಡಬೇಕಾಗಿತ್ತು.
2:25b.LUK.002.025 ಇಗೋ, ಸಿಮೆಯೋನನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಯೆರೂಸಲೇಮಿನಲ್ಲಿದ್ದನು. ಇವನು ನೀತಿವಂತನೂ ಭಕ್ತನೂ ಆಗಿದ್ದು ಇಸ್ರಾ ಯೇಲ್ಯರ ಆದರಣೆಗಾಗಿ ಕಾಯುತ್ತಿದ್ದನು. ಇವನ ಮೇಲೆ ಪವಿತ್ರಾತ್ಮನು ಇದ್ದನು.
2:26b.LUK.002.026 ಕರ್ತನಾಗಿರುವ ಕ್ರಿಸ್ತನನ್ನು ಅವನು ನೋಡುವದಕ್ಕಿಂತ ಮುಂಚೆ ಮರಣ ಹೊಂದುವದಿಲ್ಲವೆಂದು ಪರಿಶುದ್ಧಾತ್ಮನಿಂದ ಅವನಿಗೆ ಪ್ರಕಟವಾಗಿತ್ತು.
2:27b.LUK.002.027 ಅವನು ಆತ್ಮನಿಂದ ದೇವಾಲಯದೊಳಗೆ ಬಂದನು; ಶಿಶುವಾದ ಯೇಸುವಿನ ತಂದೆತಾಯಿಗಳು ನ್ಯಾಯಪ್ರಮಾಣದ ಪದ್ಧತಿಯ ಪ್ರಕಾರ ಮಾಡುವದಕ್ಕಾಗಿ ಆತನನ್ನು ಒಳಗೆ ತಂದರು.
2:28b.LUK.002.028 ಆಗ ಅವನು (ಸಿಮೆಯೋನನು) ಆತನನ್ನು ತನ್ನ ಕೈಗಳಲ್ಲಿ ತಕ್ಕೊಂಡು ದೇವರನ್ನು ಕೊಂಡಾಡುತ್ತಾ--
2:29b.LUK.002.029 ಕರ್ತನೇ, ಈಗ ನಿನ್ನ ಮಾತಿನ ಪ್ರಕಾರ ನಿನ್ನ ದಾಸನನ್ನು ಸಮಾಧಾನದಲ್ಲಿ ಹೋಗ ಮಾಡುತ್ತೀ;
2:30b.LUK.002.030 ಯಾಕಂದರೆ ನನ್ನ ಕಣ್ಣುಗಳು ನಿನ್ನ ರಕ್ಷಣೆಯನ್ನು ನೋಡಿದವು.
2:31b.LUK.002.031 ಅದನ್ನು (ಆ ರಕ್ಷಣೆಯನ್ನು) ನೀನು ಎಲ್ಲಾ ಜನರ ಮುಂದೆ ಸಿದ್ಧ ಪಡಿಸಿದ್ದೀ.
2:32b.LUK.002.032 ಅದು ಅನ್ಯಜನರನ್ನು ಬೆಳಗಿಸುವ ಬೆಳಕೂ ನಿನ್ನ ಪ್ರಜೆಯಾದ ಇಸ್ರಾಯೇಲ್ಯರ ಮಹಿ ಮೆಯೂ ಆಗಿದೆ ಅಂದನು.
2:33b.LUK.002.033 ಆಗ ಅವನು ಹೇಳಿದ ಮಾತುಗಳಿಗಾಗಿ ಯೋಸೇಫನೂ ಆತನ ತಾಯಿಯೂ ಆಶ್ಚರ್ಯಪಟ್ಟರು.
2:34b.LUK.002.034 ಸಿಮೆಯೋನನು ಅವರನ್ನು ಆಶೀರ್ವದಿಸಿ ಆತನ ತಾಯಿಯಾದ ಮರಿಯಳಿಗೆ-- ಇಗೋ, ಇಸ್ರಾಯೇಲಿನಲ್ಲಿ ಅನೇಕರು ಬೀಳುವದಕ್ಕೂ ತಿರಿಗಿ ಏಳುವದಕ್ಕೂ ಎದುರು ಮಾತನಾಡುವದಕ್ಕೂ ಈ ಶಿಶುವು ಗುರುತಾಗಿರುವನು.
2:35b.LUK.002.035 ಅನೇಕರ ಹೃದಯ ಗಳ ಅಲೋಚನೆಗಳು ಪ್ರಕಟವಾಗುವವು. (ಹೌದು, ನಿನ್ನ ಸ್ವಂತ ಪ್ರಾಣವನ್ನು ಸಹ ಕತ್ತಿಯು ತಿವಿಯುವದು) ಅಂದನು.
2:36b.LUK.002.036 ಅಲ್ಲಿ ಅಸೇರನ ಗೋತ್ರದ ಫನುವೇಲನ ಮಗಳಾದ ಅನ್ನಳೆಂಬ ಒಬ್ಬ ಪ್ರವಾದಿನಿಯಿದ್ದಳು; ಅವಳು ಬಹು ಮುಪ್ಪಿನವಳು; ತನ್ನ ಕನ್ಯಾವಸ್ಥೆಯಿಂದ ಗಂಡನೊಂದಿಗೆ ಏಳು ವರುಷ ಜೀವಿಸಿದ್ದಳು.
2:37b.LUK.002.037 ಅವಳು ಹೆಚ್ಚು ಕಡಿಮೆ ಎಂಭತ್ತುನಾಲ್ಕು ವರುಷದ ವಿಧವೆ ಯಾಗಿದ್ದು ದೇವಾಲಯವನ್ನು ಬಿಟ್ಟು ಹೋಗದೆ ರಾತ್ರಿ ಹಗಲು ಉಪವಾಸಗಳಿಂದಲೂ ಪ್ರಾರ್ಥನೆಗಳಿಂ ದಲೂ ದೇವರನ್ನು ಸೇವಿಸುತ್ತಿದ್ದಳು.
2:38b.LUK.002.038 ಆ ಕ್ಷಣದಲ್ಲಿ ಅವಳು ಬಂದು ಕರ್ತನನ್ನು ಅದೇ ರೀತಿಯಾಗಿ ಕೊಂಡಾಡಿ ಯೆರೂಸಲೇಮಿನಲ್ಲಿ ವಿಮೋಚನೆಗಾಗಿ ಎದುರು ನೋಡುತ್ತಿದ್ದವರೆಲ್ಲರೊಂದಿಗೆ ಆತನ ವಿಷಯ ವಾಗಿ ಮಾತನಾಡಿದಳು.
2:39b.LUK.002.039 ಅವರು ಕರ್ತನ ನ್ಯಾಯ ಪ್ರಮಾಣದ ಪ್ರಕಾರ ಎಲ್ಲವುಗಳನ್ನು ಮಾಡಿ ಮುಗಿ ಸಿದ ಮೇಲೆ ತಮ್ಮ ಸ್ವಂತ ಪಟ್ಟಣವಾದ ಗಲಿಲಾಯದ ನಜರೇತಿಗೆ ಹಿಂದಿರುಗಿದರು.
2:40b.LUK.002.040 ಆ ಶಿಶುವು ಬೆಳೆದು ಆತ್ಮದಲ್ಲಿ ಬಲಗೊಂಡು ಜ್ಞಾನದಿಂದ ತುಂಬಿದವ ನಾದನು; ದೇವರ ಕೃಪೆಯು ಆತನ ಮೇಲೆ ಇತ್ತು.
2:41b.LUK.002.041 ಆತನ ತಂದೆತಾಯಿಗಳು ಪ್ರತಿ ವರುಷವೂ ಪಸ್ಕ ಹಬ್ಬದಲ್ಲಿ ಯೆರೂಸಲೇಮಿಗೆ ಹೋಗುತ್ತಿದ್ದರು.
2:42b.LUK.002.042 ಆತನು ಹನ್ನೆರಡು ವರುಷದವನಾಗಿದ್ದಾಗ ಅವರು ಹಬ್ಬದ ಪದ್ಧತಿಯ ಪ್ರಕಾರ ಯೆರೂಸಲೇಮಿಗೆ ಹೋದರು.
2:43b.LUK.002.043 ಅವರು ಆ ದಿವಸಗಳನ್ನು ಮುಗಿಸಿ ಕೊಂಡು ಹಿಂದಿರುಗುವಾಗ ಬಾಲಕನಾದ ಯೇಸುವು ಹಿಂದೆ ಯೆರೂಸಲೇಮಿನಲ್ಲಿಯೇ ಉಳಿದನು; ಅದು ಯೋಸೇಫನಿಗೂ ಆತನ ತಾಯಿಗೂ ತಿಳಿದಿರಲಿಲ್ಲ.
2:44b.LUK.002.044 ಆದರೆ ಆತನು ಗುಂಪಿನಲ್ಲಿ ಇದ್ದಿರಬಹುದೆಂದು ಅವರು ಭಾವಿಸಿ ಒಂದು ದಿನದ ಪ್ರಯಾಣವನ್ನು ಮಾಡಿದ ಮೇಲೆ ತಮ್ಮ ಬಳಗದವರಲ್ಲಿಯೂ ಪರಿ ಚಯವಾದವರಲ್ಲಿಯೂ ಆತನನ್ನು ಹುಡುಕಿದರು.
2:45b.LUK.002.045 ಆದರೆ ಅವರು ಆತನನ್ನು ಕಂಡುಕೊಳ್ಳದೆ ಹೋದ ದರಿಂದ ಆತನನ್ನು ಹುಡುಕುತ್ತಾ ಮತ್ತೆ ಯೆರೂಸ ಲೇಮಿಗೆ ಹಿಂತಿರುಗಿ ಬಂದರು.
2:46b.LUK.002.046 ಮೂರು ದಿವಸ ಗಳಾದ ಮೇಲೆ ಆತನು ದೇವಾಲಯದಲ್ಲಿ ಬೋಧಕರ ನಡುವೆ ಕೂತುಕೊಂಡು ಅವರ ಮಾತುಗಳನ್ನು ಕೇಳಿಸಿ ಕೊಳ್ಳುತ್ತಾ ಅವರನ್ನು ಪ್ರಶ್ನಿಸುತ್ತಾ ಇರುವದನ್ನು ಅವರು ಕಂಡರು.
2:47b.LUK.002.047 ಆತನು ಆಡಿದ ಮಾತುಗಳನ್ನು ಕೇಳಿದ ವರೆಲ್ಲರು ಆತನ ಜ್ಞಾನಕ್ಕೂ ಉತ್ತರಗಳಿಗೂ ಬೆರಗಾ ದರು.
2:48b.LUK.002.048 ಅವರು (ತಂದೆ ತಾಯಿಗಳು) ಆತನನ್ನು ನೋಡಿದಾಗ ಆಶ್ಚರ್ಯಪಟ್ಟರು; ಆಗ ಆತನ ತಾಯಿಯು ಆತನಿಗೆ--ಮಗನೇ, ನೀನು ನಮಗೆ ಹೀಗೇಕೆ ಮಾಡಿದಿ? ಇಗೋ, ನಿನ್ನ ತಂದೆಯೂ ನಾನೂ ವ್ಯಥೆಯಿಂದ ನಿನ್ನನ್ನು ಹುಡುಕಿದೆವು ಅಂದಳು.
2:49b.LUK.002.049 ಆತನು ಅವರಿಗೆ--ನೀವು ನನ್ನನ್ನು ಹುಡುಕಿದ್ದೇನು? ನಾನು ನನ್ನ ತಂದೆಯ ಕೆಲಸದಲ್ಲಿ ಇರಬೇಕಾದದ್ದು ಅಗತ್ಯವಾಗಿತ್ತೆಂದು ನಿಮಗೆ ತಿಳಿಯಲಿಲ್ಲವೋ ಅಂದನು.
2:50b.LUK.002.050 ಆದರೆ ಆತನು ಅವರಿಗೆ ಹೇಳಿದ ಮಾತನ್ನು ಅವರು ಗ್ರಹಿಸಲಿಲ್ಲ.
2:51b.LUK.002.051 ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ಅಧೀನನಾಗಿದ್ದನು. ಆದರೆ ಆತನ ತಾಯಿಯು ಈ ಮಾತುಗಳನ್ನೆಲ್ಲಾ ತನ್ನ ಹೃದಯದಲ್ಲಿ ಇಟ್ಟುಕೊಂಡಳು.ಯೇಸು ಜ್ಞಾನದಲ್ಲಿಯೂ ದೇಹದ ಬೆಳವಣಿಗೆ ಯಲ್ಲಿಯೂ ದೇವರ ಮತ್ತು ಮನುಷ್ಯರ ದಯೆಯಲ್ಲಿಯೂ ವೃದ್ಧಿಯಾದನು.
2:52b.LUK.002.052 ಯೇಸು ಜ್ಞಾನದಲ್ಲಿಯೂ ದೇಹದ ಬೆಳವಣಿಗೆ ಯಲ್ಲಿಯೂ ದೇವರ ಮತ್ತು ಮನುಷ್ಯರ ದಯೆಯಲ್ಲಿಯೂ ವೃದ್ಧಿಯಾದನು.
3
3:1b.LUK.003.001 ಕೈಸರನಾದ ತಿಬೇರಿಯನ ಆಳಿಕೆಯ ಕಾಲದ ಹದಿನೈದನೇ ವರುಷದಲ್ಲಿ ಪೊಂತ್ಯ ಪಿಲಾತನು ಯೂದಾಯಕ್ಕೆ ಅಧಿಪತಿಯೂ ಹೆರೋದನು ಗಲಿಲಾ ಯಕ್ಕೆ ಚತುರಾಧಿಪತಿಯೂ ಅವನ ಸಹೋದರನಾದ ಫಿಲಿಪ್ಪನು ಇತುರಾಯ ಮತ್ತು ತ್ರಕೋನೀತಿ ಸೀಮೆಗೆ ಚತುರಾಧಿಪತಿಯೂ ಲುಸನ್ಯನು ಅಬಿಲೇನೆಗೆ ಚತುರಾ ಧಿಪತಿಯೂ
3:2b.LUK.003.002 ಅನ್ನನು ಮತ್ತು ಕಾಯಫನು ಮಹಾ ಯಾಜಕರೂ ಆಗಿದ್ದಾಗ ಅಡವಿಯಲ್ಲಿದ್ದ ಜಕರೀಯನ ಮಗನಾದ ಯೋಹಾನನ ಬಳಿಗೆ ದೇವರ ವಾಕ್ಯವು ಬಂತು.
3:3b.LUK.003.003 ಅವನು ಯೊರ್ದನಿನ ಸುತ್ತಲಿರುವ ಎಲ್ಲಾ ಸೀಮೆಗಳಿಗೆ ಬಂದು ಪಾಪಗಳ ಪರಿಹಾರಕ್ಕಾಗಿ ಮಾನ ಸಾಂತರದ ಬಾಪ್ತಿಸ್ಮವನ್ನು ಸಾರಿ ಹೇಳುವವನಾದನು.
3:4b.LUK.003.004 ಪ್ರವಾದಿಯಾದ ಯೆಶಾಯನ ವಾಕ್ಯಗಳ ಪುಸ್ತಕ ದಲ್ಲಿ--ಕರ್ತನ ಮಾರ್ಗವನ್ನು ಸಿದ್ಧ ಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ ಎಂದೂ
3:5b.LUK.003.005 ಪ್ರತಿಯೊಂದು ತಗ್ಗು ಮುಚ್ಚಿಸಲ್ಪಡುವದು, ಪ್ರತಿಯೊಂದು ಬೆಟ್ಟವು ತಗ್ಗಿಸಲ್ಪಡುವದು, ಡೊಂಕಾದವುಗಳು ನೆಟ್ಟಗಾಗುವವು ಮತ್ತು ಕೊರಕಲಾದ ದಾರಿಗಳು ಸಮವಾಗುವವು;
3:6b.LUK.003.006 ಮಾನವರೆಲ್ಲರು ದೇವರ ರಕ್ಷಣೆಯನ್ನು ಕಾಣುವರು ಎಂದೂ ಬರೆದಿರುವಂತೆ ಹೀಗಾಯಿತು.
3:7b.LUK.003.007 ಆಗ ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕಾಗಿ ಹೊರಟು ಬಂದ ಜನಸಮೂಹಕ್ಕೆ--ಓ ಸರ್ಪಗಳ ಸಂತತಿಯವರೇ, ಬರುವದಕ್ಕಿರುವ ಕೋಪದಿಂದ ತಪ್ಪಿಸಿಕೊಳ್ಳುವಂತೆ ನಿಮ್ಮನ್ನು ಎಚ್ಚರಿಸಿದವರಾರು?
3:8b.LUK.003.008 ಹಾಗಾದರೆ ಮಾನಸಾ ಂತರಕ್ಕೆ ಯೋಗ್ಯವಾದ ಫಲಗಳನ್ನು ಫಲಿಸಿರಿ,--ಅಬ್ರಹಾಮನು ನಮಗೆ ತಂದೆಯಾಗಿದ್ದಾನೆಂದು ನಿಮ್ಮೊಳಗೆ ಅಂದುಕೊಳ್ಳುವದಕ್ಕೆ ಆರಂಭಿಸಬೇ ಡಿರಿ; ಯಾಕಂದರೆ--ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.
3:9b.LUK.003.009 ಈಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇಫಲ ಫಲಿ ಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿಯಲ್ಲಿ ಹಾಕಲ್ಪಡುವದು ಎಂದು ಹೇಳಿದನು.
3:10b.LUK.003.010 ಆಗ ಜನರು ಅವನಿಗೆ--ಹಾಗಾದರೆ ನಾವೇನು ಮಾಡಬೇಕು ಎಂದು ಕೇಳಿದರು.
3:11b.LUK.003.011 ಅವನು ಪ್ರತ್ಯುತ್ತರವಾಗಿ ಅವರಿಗೆ--ಎರಡು ಅಂಗಿಗಳುಳ್ಳವನು ಏನೂ ಇಲ್ಲದವ ನಿಗೆ ಕೊಡಲಿ; ಆಹಾರವುಳ್ಳವನು ಹಾಗೆಯೇ ಮಾಡಲಿ ಎಂದು ಹೇಳಿದನು.
3:12b.LUK.003.012 ತರುವಾಯ ಸುಂಕದವರು ಸಹ ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕಾಗಿ ಬಂದು ಅವನಿಗೆ--ಬೋಧಕನೇ, ನಾವೇನು ಮಾಡಬೇಕು ಎಂದು ಕೇಳಿದರು.
3:13b.LUK.003.013 ಅದಕ್ಕವನು ಅವರಿಗೆ-- ನಿಮಗೆ ನೇಮಿಸಲ್ಪಟ್ಟದ್ದಕ್ಕಿಂತ ಹೆಚ್ಚೇನೂ ತೆಗೆದು ಕೊಳ್ಳಬೇಡಿರಿ ಅಂದನು.
3:14b.LUK.003.014 ಅದರಂತೆಯೇ ಸೈನಿ ಕರು--ನಾವೇನು ಮಾಡತಕ್ಕದ್ದು ಎಂದು ಕೇಳಿದ್ದಕ್ಕೆ ಅವನು ಅವರಿಗೆ--ಯಾರನ್ನೂ ಹಿಂಸಿಸಬೇಡಿರಿ; ಇಲ್ಲವೆ ಯಾರ ಮೇಲೆಯೂ ಸುಳ್ಳಾಗಿ ದೂರು ಹೇಳಬೇಡಿರಿ; ನಿಮ್ಮ ಸಂಬಳದಲ್ಲಿ ತೃಪ್ತರಾಗಿರ್ರಿ ಎಂದು ಹೇಳಿದನು.
3:15b.LUK.003.015 ಆಗ ಜನರು ಕ್ರಿಸ್ತನನ್ನು ಎದುರು ನೋಡುವವರಾಗಿದ್ದರಿಂದ ಯೋಹಾನನು ಆ ಕ್ರಿಸ್ತನಾ ಗಿರಬಹುದೋ ಇಲ್ಲವೋ ಎಂದು ಎಲ್ಲರೂ ತಮ್ಮ ಹೃದಯಗಳಲ್ಲಿ ಆಲೋಚಿಸುತ್ತಿದ್ದರು.
3:16b.LUK.003.016 ಆಗ ಯೋಹಾನನು ಪ್ರತ್ಯುತ್ತರವಾಗಿ ಅವರೆಲ್ಲ ರಿಗೆ--ನಾನಂತೂ ನಿಮಗೆ ನೀರಿನ ಬಾಪ್ತಿಸ್ಮ ಮಾಡಿಸು ವದು ನಿಜವೇ; ಆದರೆ ನನಗಿಂತ ಶಕ್ತನೊಬ್ಬನು ಬರು ತ್ತಾನೆ; ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಿಂದಲೂ ಬೆಂಕಿಯಿಂ ದಲೂ ನಿಮಗೆ ಬಾಪ್ತಿಸ್ಮ ಮಾಡಿಸುವನು
3:17b.LUK.003.017 ಆತನ ಮೊರವು ಆತನ ಕೈಯಲ್ಲಿದೆ. ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ಗೋದಿಯನ್ನು ತನ್ನ ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಡುವನು ಎಂದು ಹೇಳಿದನು.
3:18b.LUK.003.018 ಅವನು ಇನ್ನೂ ಅನೇಕ ವಿಷಯಗಳಿಂದ ಎಚ್ಚರಿಸಿ ಜನರಿಗೆ ಸಾರಿದನು.
3:19b.LUK.003.019 ಆದರೆ ಚತುರಾಧಿಪತಿಯಾದ ಹೆರೋದನು ತನ್ನ ಸಹೋದರನಾದ ಫಿಲಿಪ್ಪನ ಹೆಂಡ ತಿಯಾದ ಹೆರೋದ್ಯಳಿಗಾಗಿಯೂ ಹೆರೋದನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳಿಗಾಗಿಯೂ ಯೋಹಾ ನನು ಅವನನ್ನು ಗದರಿಸಿದ್ದರಿಂದ
3:20b.LUK.003.020 ಅವನು ಯೋಹಾ ನನನ್ನು ಸೆರೆಯಲ್ಲಿ ಹಾಕಿ ತಾನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳ ಮೇಲೆ ಇದನ್ನು ಕೂಡಿಸಿದನು.
3:21b.LUK.003.021 ಜನರೆಲ್ಲಾ ಬಾಪ್ತಿಸ್ಮ ಮಾಡಿಸಿಕೊಂಡ ಮೇಲೆ ಆದದ್ದೇನಂದರೆ ಯೇಸು ಸಹ ಬಾಪ್ತಿಸ್ಮ ಮಾಡಿಸಿಕೊಂಡು ಪ್ರಾರ್ಥಿಸುತ್ತಿದ್ದಾಗ ಆಕಾಶವು ತೆರೆಯಲ್ಪಟ್ಟಿತು.
3:22b.LUK.003.022 ಆಗ ಪರಿಶುದ್ಧಾತ್ಮನು ಪಾರಿವಾಳದ ದೇಹಾಕಾರದಲ್ಲಿ ಇಳಿ ದನು; --ನೀನು ಪ್ರಿಯನಾಗಿರುವ ನನ್ನ ಮಗನು; ನಿನ್ನಲ್ಲಿ ನಾನು ಆನಂದಿಸುತ್ತೇನೆ ಎಂಬ ಧ್ವನಿಯು ಪರ ಲೋಕದೊಳಗಿಂದ ಬಂತು.
3:23b.LUK.003.023 ಯೇಸು ಹೆಚ್ಚು ಕಡಿಮೆ ಮೂವತ್ತು ವರುಷದ ವನಾದನು; ಆತನು ಯೋಸೇಫನ ಮಗನೆಂದು (ಎಣಿಸಲ್ಪಟ್ಟನು); ಯೋಸೇಫನು ಹೇಲೀಯ ಮಗನು;
3:24b.LUK.003.024 ಇವನು ಮತ್ಥಾತನ ಮಗನು; ಇವನು ಲೇವಿಯ ಮಗನು; ಇವನು ಮೆಲ್ಖಿಯ ಮಗನು; ಇವನು ಯನ್ನಾಯನ ಮಗನು; ಇವನು ಯೋಸೇಫನ ಮಗನು;
3:25b.LUK.003.025 ಇವನು ಮತ್ತಥೀಯನ ಮಗನು; ಇವನು ಆಮೋಸನ ಮಗನು; ಇವನು ನಹೂಮನ ಮಗನು; ಇವನು ಎಸ್ಲಿಯ ಮಗನು;
3:26b.LUK.003.026 ಇವನು ನಗ್ಗಾಯನ ಮಗನು; ಇವನು ಮಹಾಥನ ಮಗನು; ಇವನು ಮತ್ತಥೀಯನ ಮಗನು; ಇವನು ಶಿಮೀಯ ಮಗನು; ಇವನು ಯೋಸೇಫನ ಮಗನು; ಇವನು ಯೂದನ ಮಗನು;
3:27b.LUK.003.027 ಇವನು ಯೋಹಾನನ ಮಗನು; ಇವನು ರೇಸನ ಮಗನು; ಇವನು ಜೆರುಬಾ ಬೆಲನ ಮಗನು; ಇವನು ಸಲಥಿಯೇಲನ ಮಗನು; ಇವನು ನೇರಿಯ ಮಗನು;
3:28b.LUK.003.028 ಇವನು ಮೆಲ್ಖಿಯ ಮಗನು; ಇವನು ಅದ್ದಿಯ ಮಗನು; ಇವನು ಕೊಸಾಮನ ಮಗನು; ಇವನು ಎಲ್ಮದಾಮನ ಮಗನು; ಇವನು ಏರನ ಮಗನು;
3:29b.LUK.003.029 ಇವನು ಯೋಸೇಯನ ಮಗನು; ಇವನು ಎಲಿಯೇಜರನ ಮಗನು; ಇವನು ಯೋರೈಮನ ಮಗನು; ಇವನು ಮತ್ಥಾತನ ಮಗನು; ಇವನು ಲೇವಿಯ ಮಗನು;
3:30b.LUK.003.030 ಇವನು ಸಿಮಿ ಯೋನನ ಮಗನು; ಇವನು ಯೂದನ ಮಗನು; ಇವನು ಯೋಸೇಫನ ಮಗನು; ಇವನು ಯೋನಾಮನ ಮಗನು; ಇವನು ಎಲಿಯಕೀಮನ ಮಗನು;
3:31b.LUK.003.031 ಇವನು ಮೆಲೆಯಾನ ಮಗನು; ಇವನು ಮೆನ್ನನ ಮಗನು; ಇವನು ಮತ್ತಾಥನ ಮಗನು; ಇವನು ನಾತಾನನ ಮಗನು; ಇವನು ದಾವೀದನ ಮಗನು;
3:32b.LUK.003.032 ಇವನು ಇಷಯನ ಮಗನು; ಇವನು ಓಬೇದನ ಮಗನು; ಇವನು ಬೋವಜನ ಮಗನು; ಇವನು ಸಲ್ಮೋನನ ಮಗನು; ಇವನು ನಹಸ್ಸೋನನ ಮಗನು;
3:33b.LUK.003.033 ಇವನು ಅಮ್ಮಿನಾದಾಬನ ಮಗನು; ಇವನು ಅರಾಮನ ಮಗನು; ಇವನು ಎಸ್ರೋಮನ ಮಗನು; ಇವನು ಪೆರೆಸನ ಮಗನು; ಇವನು ಯೂದನ ಮಗನು;
3:34b.LUK.003.034 ಇವನು ಯಾಕೋಬನ ಮಗನು; ಇವನು ಇಸಾಕನ ಮಗನು; ಇವನು ಅಬ್ರಹಾಮನ ಮಗನು; ಇವನು ತೇರನ ಮಗನು; ಇವನು ನಹೋರನ ಮಗನು;
3:35b.LUK.003.035 ಇವನು ಸೆರೂಗನ ಮಗನು; ಇವನು ರೆಗೂವನ ಮಗನು; ಇವನು ಪೆಲೆಗನ ಮಗನು; ಇವನು ಹೇಬೆರನ ಮಗನು; ಇವನು ಸಾಲನ ಮಗನು;
3:36b.LUK.003.036 ಇವನು ಕಯಿನಾನನ ಮಗನು; ಇವನು ಅರ್ಫಕ್ಷಾದನ ಮಗನು; ಇವನು ಶೇಮನ ಮಗನು; ಇವನು ನೋಹನ ಮಗನು; ಇವನು ಲಾಮೆಕನ ಮಗನು;
3:37b.LUK.003.037 ಇವನು ಮೆತೂಷಲನ ಮಗನು; ಇವನು ಹನೋಕನ ಮಗನು; ಇವನು ಯೆರೆದನ ಮಗನು; ಇವನು ಮಹಲಲೇಲನ ಮಗನು; ಇವನು ಕಾಯಿನನ ಮಗನು;ಇವನು ಎನೋಷನ ಮಗನು; ಇವನು ಸೇಥನ ಮಗನು; ಇವನು ಆದಾಮನ ಮಗನು; ಇವನು ದೇವರ ಮಗನು.
3:38b.LUK.003.038 ಇವನು ಎನೋಷನ ಮಗನು; ಇವನು ಸೇಥನ ಮಗನು; ಇವನು ಆದಾಮನ ಮಗನು; ಇವನು ದೇವರ ಮಗನು.
4
4:1b.LUK.004.001 ಯೇಸು ಪರಿಶುದ್ಧಾತ್ಮನಿಂದ ತುಂಬಿದವನಾಗಿ ಯೊರ್ದನಿನಿಂದ ಹಿಂತಿರುಗಿ ಬಂದು ಆತ್ಮ ನಿಂದ ಅಡವಿಯೊಳಕ್ಕೆ ನಡಿಸಲ್ಪಟ್ಟು
4:2b.LUK.004.002 ನಾಲ್ವತ್ತು ದಿನಗಳು ಸೈತಾನನಿಂದ ಶೋಧಿಸಲ್ಪಡುತ್ತಿದ್ದನು. ಆ ದಿನಗಳಲ್ಲಿ ಆತನು ಏನೂ ತಿನ್ನಲಿಲ್ಲ. ಅವು ಮುಗಿದ ಮೇಲೆ ಆತನು ಹಸಿದನು.
4:3b.LUK.004.003 ಆಗ ಸೈತಾನನು ಆತ ನಿಗೆ--ನೀನು ದೇವಕುಮಾರನಾಗಿದ್ದರೆ ಈ ಕಲ್ಲು ರೊಟ್ಟಿಯಾಗುವಂತೆ ಅಪ್ಪಣೆಕೊಡು ಅಂದನು.
4:4b.LUK.004.004 ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಮನುಷ್ಯನು ರೊಟ್ಟಿಯಿಂದ ಮಾತ್ರವೇ ಅಲ್ಲ, ಆದರೆ ದೇವರ ಪ್ರತಿಯೊಂದು ಮಾತಿನಿಂದ ಜೀವಿಸುವನು ಎಂದು ಬರೆದದೆ ಅಂದನು.
4:5b.LUK.004.005 ಬಳಿಕ ಸೈತಾನನು ಉನ್ನತವಾದ ಬೆಟ್ಟಕ್ಕೆ ಆತನನ್ನು ಕರಕೊಂಡುಹೋಗಿ ಲೋಕದ ಎಲ್ಲಾ ರಾಜ್ಯಗಳನ್ನು ಕ್ಷಣಮಾತ್ರದಲ್ಲಿ ಆತನಿಗೆ ತೋರಿಸಿದನು.
4:6b.LUK.004.006 ಸೈತಾನನು ಆತನಿಗೆ--ಈ ಎಲ್ಲಾ ಅಧಿಕಾರವನ್ನೂ ಅವುಗಳ ವೈಭವವನ್ನೂ ನಾನು ನಿನಗೆ ಕೊಡುವೆನು; ಯಾಕಂದರೆ ಅದು ನನಗೆ ಕೊಡಲ್ಪಟ್ಟಿರುವದರಿಂದ ನನಗೆ ಇಷ್ಟ ಬಂದ ಯಾರಿಗಾದರೂ ನಾನು ಕೊಡು ವೆನು.
4:7b.LUK.004.007 ಆದದರಿಂದ ನೀನು ನನ್ನನ್ನು ಆರಾಧಿಸಿದರೆ ಎಲ್ಲವುಗಳು ನಿನ್ನದಾಗುವವು ಎಂದು ಹೇಳಿದನು.
4:8b.LUK.004.008 ಯೇಸು ಅವನಿಗೆ ಪ್ರತ್ಯುತ್ತರವಾಗಿ--ಸೈತಾನನೇ, ನನ್ನ ಹಿಂದೆ ಹೋಗು; ಯಾಕಂದರೆ--ನೀನು ನಿನ್ನ ದೇವರಾದ ಕರ್ತನನ್ನು ಆರಾಧಿಸಿ ಆತನೊಬ್ಬನನ್ನೇ ಸೇವಿಸತಕ್ಕದ್ದು ಎಂದು ಬರೆದದೆ ಅಂದನು.
4:9b.LUK.004.009 ಇದಲ್ಲದೆ ಅವನು ಆತನನ್ನು ಯೆರೂಸಲೇಮಿಗೆ ಕರತಂದು ದೇವಾಲಯ ಗೋಪುರದ ಮೇಲೆ ನಿಲ್ಲಿಸಿ ಆತನಿಗೆ--ನೀನು ದೇವಕುಮಾರನಾಗಿದ್ದರೆ ಇಲ್ಲಿಂದ ಕೆಳಗೆ ದುಮುಕು;
4:10b.LUK.004.010 ಆತನು ನಿನ್ನನ್ನು ಕಾಯುವದಕ್ಕೆ ತನ್ನ ದೂತರಿಗೆ ಅಪ್ಪಣೆ ಕೊಡುವನು;
4:11b.LUK.004.011 ಯಾವ ಸಮಯದಲ್ಲಿಯಾದರೂ ನಿನ್ನ ಕಾಲು ಕಲ್ಲಿಗೆ ಅಪ್ಪಳಿಸ ದಂತೆ ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು ಎಂದು ಬರೆದದೆ ಅಂದನು.
4:12b.LUK.004.012 ಅದಕ್ಕೆ ಯೇಸು ಪ್ರತ್ಯು ತ್ತರವಾಗಿ ಅವನಿಗೆ--ನೀನು ನಿನ್ನ ದೇವರಾದ ಕರ್ತನನ್ನು ಶೋಧಿಸಬಾರದೆಂದು ಹೇಳಲ್ಪಟ್ಟಿದೆ ಅಂದನು.
4:13b.LUK.004.013 ಸೈತಾನನು ಎಲ್ಲಾ ಶೋಧನೆಯನ್ನು ಮುಗಿಸಿದ ಮೇಲೆ ಸ್ವಲ್ಪ ಕಾಲ ಆತನ ಬಳಿಯಿಂದ ಹೊರಟು ಹೋದನು.
4:14b.LUK.004.014 ತರುವಾಯ ಯೇಸು ಆತ್ಮನಿಂದ ಬಲಹೊಂದಿ ಗಲಿಲಾಯಕ್ಕೆ ಹಿಂದಿರುಗಿದನು. ಆತನ ಕೀರ್ತಿಯು ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಹರಡಿತು.
4:15b.LUK.004.015 ಆತನು ಎಲ್ಲರಿಂದ ಮಹಿಮೆಯನ್ನು ಹೊಂದುತ್ತಾ ಅವರ ಸಭಾಮಂದಿರಗಳಲ್ಲಿ ಬೋಧಿಸಿದನು.
4:16b.LUK.004.016 ಆತನು ತಾನು ಬೆಳೆದ ನಜರೇತಿಗೆ ಬಂದು ತನ್ನ ಪದ್ಧತಿಯಂತೆ ಸಬ್ಬತ್ ದಿನದಲ್ಲಿ ಸಭಾಮಂದಿರ ದೊಳಕ್ಕೆ ಹೋಗಿ ಓದುವದಕ್ಕಾಗಿ ಎದ್ದುನಿಂತನು.
4:17b.LUK.004.017 ಆಗ ಪ್ರವಾದಿಯಾದ ಯೆಶಾಯನ ಪುಸ್ತಕವು ಆತನಿಗೆ ಕೊಡಲ್ಪಟ್ಟಿತು. ಆತನು ಆ ಪುಸ್ತಕವನ್ನು ತೆರೆದು--
4:18b.LUK.004.018 ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ
4:19b.LUK.004.019 ಕರ್ತನ ಅಂಗೀಕೃತವಾದ ವರುಷವನ್ನು ಸಾರುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ ಎಂದು ಬರೆದಿರುವದನ್ನು ಕಂಡು ಓದಿದನು.
4:20b.LUK.004.020 ಆತನು ಆ ಪುಸ್ತಕವನ್ನು ಮುಚ್ಚಿ ತಿರಿಗಿ ಪರಿಚಾರಕನ ಕೈಗೆ ಕೊಟ್ಟು ಕೂತುಕೊಂಡನು. ಆಗ ಆ ಸಭಾ ಮಂದಿರದಲ್ಲಿದ್ದವ ರೆಲ್ಲರ ಕಣ್ಣುಗಳು ಆತನನ್ನೇ ದೃಷ್ಟಿಸಿದವು.
4:21b.LUK.004.021 ಆತನು ಅವರಿಗೆ--ನೀವು ಕಿವಿಯಿಂದ ಕೇಳಿದ ಈ ಬರಹವು ಈ ದಿವಸ ನೆರವೇರಿತು ಎಂದು ಹೇಳಲಾರಂಭಿಸಿದನು.
4:22b.LUK.004.022 ಎಲ್ಲರೂ ಆತನಿಗೆ ಸಾಕ್ಷಿಕೊಟ್ಟು ಆತನ ಬಾಯಿಂದ ಹೊರಟ ಕೃಪಾವಾಕ್ಯಗಳಿಗಾಗಿ ಆಶ್ಚರ್ಯಪಟ್ಟು-- ಈತನು ಯೋಸೇಫನ ಮಗನಲ್ಲವೇ ಅಂದರು.
4:23b.LUK.004.023 ಆತನು ಅವರಿಗೆ--ವೈದ್ಯನೇ, ನಿನ್ನನ್ನು ನೀನೇ ವಾಸಿ ಮಾಡಿಕೋ ಎಂಬ ಈ ನಾನ್ನುಡಿಯನ್ನು ನೀವು ನನಗೆ ನಿಶ್ಚಯವಾಗಿ ಹೇಳಿ ಕಪೆರ್ನೌಮಿನಲ್ಲಿ ಯಾವದು ನಡೆಯಿತೆಂದು ನಾವು ಕೇಳಿದೆವೋ ಅದನ್ನು ಇಲ್ಲಿ ನಿನ್ನ ದೇಶದಲ್ಲಿಯೂ ಮಾಡು ಎಂದು ಹೇಳುವಿರಿ ಅಂದನು.
4:24b.LUK.004.024 ಆತನು--ನಿಮಗೆ ನಿಜವಾಗಿ ಹೇಳುವದೇನಂದರೆ--ಯಾವ ಪ್ರವಾದಿಯೂ ತನ್ನ ಸ್ವದೇಶದಲ್ಲಿ ಅಂಗೀಕರಿಸಲ್ಪಡುವದಿಲ್ಲ.
4:25b.LUK.004.025 ಆದರೆ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಎಲೀಯನ ದಿವಸಗಳಲ್ಲಿ ಮೂರು ವರುಷ ಆರು ತಿಂಗಳು ಆಕಾಶವು ಮುಚ್ಚಲ್ಪಟ್ಟು ದೇಶದಲ್ಲೆಲ್ಲಾ ದೊಡ್ಡ ಬರ ಉಂಟಾದಾಗ ಇಸ್ರಾಯೇಲಿನಲ್ಲಿ ಅನೇಕ ವಿಧವೆಯರು ಇದ್ದರೂ
4:26b.LUK.004.026 ಅವರಲ್ಲಿ ಯಾರ ಬಳಿಗೂ (ದೇವರು) ಎಲೀಯನನ್ನು ಕಳುಹಿಸದೆ ಸೀದೋನ್ ಪಟ್ಟಣದ ಸರೆಪ್ತದಲ್ಲಿದ್ದ ಒಬ್ಬ ವಿಧವೆಯ ಬಳಿಗೇ ಕಳುಹಿಸಿದನು.
4:27b.LUK.004.027 ಪ್ರವಾದಿಯಾದ ಎಲೀಷನ ಕಾಲ ದಲ್ಲಿ ಅನೇಕ ಕುಷ್ಠರೋಗಿಗಳು ಇಸ್ರಾಯೇಲಿನಲ್ಲಿ ದ್ದಾಗ್ಯೂ ಸಿರಿಯದವನಾದ ನಾಮಾನನ ಹೊರತು ಅವರಲ್ಲಿ ಒಬ್ಬನಾದರೂ ಶುದ್ಧನಾಗಲಿಲ್ಲ ಅಂದನು.
4:28b.LUK.004.028 ಆಗ ಸಭಾಮಂದಿರದಲ್ಲಿದ್ದವರೆಲ್ಲರೂ ಇವುಗಳನ್ನು ಕೇಳಿ ಕೋಪದಿಂದ ತುಂಬಿದವರಾದರು.
4:29b.LUK.004.029 ಅವರು ಮೇಲಕ್ಕೆದ್ದು ಆತನನ್ನು ಪಟ್ಟಣದ ಹೊರಗೆ ದೂಡಿ ಕೊಂಡು ಹೋಗಿ ತಲೆ ಕೆಳಗೆ ಮಾಡಿ ದೊಬ್ಬಬೇಕೆಂದು ತಮ್ಮ ಪಟ್ಟಣವು ಕಟ್ಟಲ್ಪಟ್ಟಿದ್ದ ಬೆಟ್ಟದ ಕಡಿದಾದ ಸ್ಥಳಕ್ಕೆ ಆತನನ್ನು ನಡಿಸಿಕೊಂಡು ಹೋದರು.
4:30b.LUK.004.030 ಆದರೆ ಆತನು ಅವರ ಮಧ್ಯದಿಂದ ಹಾದು ಹೊರಟು ಹೋದನು.
4:31b.LUK.004.031 ಆತನು ಗಲಿಲಾಯ ಪಟ್ಟಣವಾದ ಕಪೆ ರ್ನೌಮಿಗೆ ಬಂದು ಸಬ್ಬತ್ ದಿನಗಳಲ್ಲಿ ಅವರಿಗೆ ಬೋಧಿಸುತ್ತಿದ್ದನು.
4:32b.LUK.004.032 ಅವರು ಆತನ ಬೋಧನೆಗೆ ಆಶ್ಚರ್ಯಪಟ್ಟರು; ಯಾಕಂದರೆ ಆತನ ವಾಕ್ಯವು ಅಧಿಕಾರದಿಂದ ಕೂಡಿದ್ದಾಗಿತ್ತು.
4:33b.LUK.004.033 ಆ ಸಭಾಮಂದಿರ ದಲ್ಲಿ ಅಶುದ್ಧ ದೆವ್ವ ಆತ್ಮವಿದ್ದ ಒಬ್ಬ ಮನುಷ್ಯನಿದ್ದನು. ಅವನು ಗಟ್ಟಿಯಾಗಿ ಕೂಗುತ್ತಾ--
4:34b.LUK.004.034 ನಮ್ಮನ್ನು ಬಿಟ್ಟು ಬಿಡು; ನಜರೇತಿನ ಯೇಸುವೇ, ನಮ್ಮಗೊಡವೆ ನಿನಗೆ ಯಾಕೆ? ನಮ್ಮನ್ನು ನಾಶಮಾಡುವದಕ್ಕಾಗಿ ನೀನು ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು; ನೀನು ದೇವರ ಪರಿಶುದ್ಧನು ಎಂದು ಹೇಳಿದನು.
4:35b.LUK.004.035 ಆಗ ಯೇಸು ಅವನನ್ನು ಗದರಿಸಿ--ಸುಮ್ಮನಿರು, ಅವನೊಳಗಿಂದ ಹೊರಗೆ ಬಾ ಅಂದನು. ಆ ದೆವ್ವವು ಅವನನ್ನು ಮಧ್ಯದಲ್ಲಿ ಕೆಡವಿ ಅವನನ್ನು ಬಾಧಿಸದೆ ಅವನೊಳಗಿಂದ ಹೊರಗೆ ಬಂತು.
4:36b.LUK.004.036 ಆಗ ಅವರೆ ಲ್ಲರೂ ಬೆರಗಾಗಿ--ಇದೆಂಥ ಮಾತಾಗಿದೆ! ಈತನು ಅಧಿಕಾರದಿಂದಲೂ ಬಲದಿಂದಲೂ ಅಶುದ್ಧಾತ್ಮಗಳಿಗೆ ಅಪ್ಪಣೆ ಕೊಡಲು ಅವು ಹೊರಗೆ ಬರುತ್ತವಲ್ಲಾ ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡರು.
4:37b.LUK.004.037 ಆತನ ಕೀರ್ತಿಯು ಸುತ್ತಲಿನ ಪ್ರದೇಶದ ಪ್ರತಿಯೊಂದು ಸ್ಥಳದಲ್ಲಿ ಹರಡಿತು.
4:38b.LUK.004.038 ತರುವಾಯ ಆತನು ಸಭಾಮಂದಿರದಿಂದ ಎದ್ದು ಸೀಮೋನನ ಮನೆಯಲ್ಲಿ ಪ್ರವೇಶಿಸಿದನು; ಅಲ್ಲಿ ಸೀಮೋನನ ಹೆಂಡತಿಯ ತಾಯಿಗೆ ಕಠಿಣ ಜ್ವರವಿದ್ದದ ರಿಂದ ಅವರು ಆಕೆಗೋಸ್ಕರ ಆತನನ್ನು ಬೇಡಿಕೊಂಡರು.
4:39b.LUK.004.039 ಆಗ ಆತನು ಆಕೆಯ ಬಳಿಯಲ್ಲಿ ನಿಂತು ಜ್ವರವನ್ನು ಗದರಿಸಲು ಅದು ಆಕೆಯನ್ನು ಬಿಟ್ಟಿತು; ಕೂಡಲೆ ಆಕೆಯು ಎದ್ದು ಅವರನ್ನು ಉಪಚರಿಸಿದಳು.
4:40b.LUK.004.040 ಸೂರ್ಯಾಸ್ತಮಾನವಾಗುತ್ತಿದ್ದಾಗ ನಾನಾ ವಿಧ ವಾದ ರೋಗಗಳಿಂದ ಅಸ್ವಸ್ಥವಾದವರೆಲ್ಲರನ್ನು ಅವರು ಆತನ ಬಳಿಗೆ ತಂದರು; ಆತನು ಅವರಲ್ಲಿ ಪ್ರತಿಯೊಬ್ಬನ ಮೇಲೆ ತನ್ನ ಕೈಗಳನ್ನಿಟ್ಟು ಅವರನ್ನು ಸ್ವಸ್ಥಪಡಿಸಿದನು.
4:41b.LUK.004.041 ಅನೇಕರೊಳಗಿಂದ ದೆವ್ವಗಳು ಸಹ ಹೊರಗೆ ಬಂದು ಕೂಗುತ್ತಾ--ನೀನು ದೇವಕುಮಾರನಾದ ಕ್ರಿಸ್ತನೇ ಎಂದು ಹೇಳಿದವು. ಆತನು ಅವುಗಳನ್ನು ಗದರಿಸಿ ಮಾತನಾಡಬಾರದೆಂದು ಹೇಳಿದನು. ಯಾಕಂದರೆ ಆತನು ಕ್ರಿಸ್ತನೆಂದು ಅವುಗಳಿಗೆ ಗೊತ್ತಿತ್ತು.
4:42b.LUK.004.042 ಬೆಳಗಾದ ಮೇಲೆ ಆತನು ಅರಣ್ಯ ಸ್ಥಳಕ್ಕೆ ಹೊರಟು ಹೋದನು; ಜನರು ಆತನನ್ನು ಹುಡುಕಿಕೊಂಡು ಆತನ ಬಳಿಗೆ ಬಂದು ತಮ್ಮನ್ನು ಬಿಟ್ಟು ಹೋಗ ಬಾರದೆಂದು ಆತನನ್ನು ತಡೆದರು.
4:43b.LUK.004.043 ಆದರೆ ಆತನು ಅವರಿಗೆ--ಬೇರೆ ಪಟ್ಟಣಗಳಿಗೂ ದೇವರ ರಾಜ್ಯವನ್ನು ನಾನು ಸಾರಲೇಬೇಕು; ಇದಕ್ಕಾಗಿಯೇ ನಾನು ಕಳುಹಿಸಲ್ಪಟ್ಟಿದ್ದೇನೆ ಅಂದನು.ಆತನು ಗಲಿಲಾಯದ ಸಭಾಮಂದಿರಗಳಲ್ಲಿ ಸಾರಿದನು.
4:44b.LUK.004.044 ಆತನು ಗಲಿಲಾಯದ ಸಭಾಮಂದಿರಗಳಲ್ಲಿ ಸಾರಿದನು.
5
5:1b.LUK.005.001 ಇದಾದ ಮೇಲೆ ಆತನು ಗೆನೇಜರೆತ್ ಕೆರೆಯ ಬಳಿಯಲ್ಲಿ ನಿಂತುಕೊಂಡಿದ್ದಾಗ ಜನರು ದೇವರ ವಾಕ್ಯವನ್ನು ಕೇಳುವದಕ್ಕಾಗಿ ಆತನ ಮೇಲೆ ನೂಕಾಡುತ್ತಿದ್ದರು.
5:2b.LUK.005.002 ಆಗ ಆತನು ಕೆರೆಯ ಬಳಿಯಲ್ಲಿ ಎರಡು ದೋಣಿಗಳನ್ನು ಕಂಡನು; ಅಲ್ಲಿ ಬೆಸ್ತರು ಅವುಗಳಿಂದ ಹೊರಗೆ ಹೋಗಿ ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು.
5:3b.LUK.005.003 ಆಗ ಅವುಗಳಲ್ಲಿ ಸೀಮೋನನದಾಗಿದ್ದ ದೋಣಿಯನ್ನು ಆತನು ಹತ್ತಿದ ಮೇಲೆ ಅದನ್ನು ಭೂಮಿಯಿಂದ ಸ್ವಲ್ಪ ನೂಕ ಬೇಕೆಂದು ಅವನನ್ನು ಕೇಳಿಕೊಂಡನು. ಆತನು ಕೂತುಕೊಂಡು ದೋಣಿಯೊಳಗಿಂದ ಜನರಿಗೆ ಬೋಧಿಸಿದನು.
5:4b.LUK.005.004 ಆತನು ಮಾತನಾಡುವದನ್ನು ಮುಗಿಸಿದ ಮೇಲೆ ಸೀಮೋನನಿಗೆ--(ದೋಣಿಯನ್ನು) ಆಳವಾದ ಸ್ಥಳಕ್ಕೆ ನಡಿಸಿ ವಿಾನು ಹಿಡಿಯುವದಕ್ಕೆ ನಿಮ್ಮ ಬಲೆಗಳನ್ನು ಬೀಸಿರಿ ಎಂದು ಹೇಳಿದನು.
5:5b.LUK.005.005 ಅದಕ್ಕೆ ಪ್ರತ್ಯುತ್ತರವಾಗಿ ಸೀಮೋನನು ಆತನಿಗೆ--ಗುರುವೇ, ನಾವು ರಾತ್ರಿ ಯೆಲ್ಲಾ ಪ್ರಯಾಸಪಟ್ಟೆವು. ಆದರೆ ಏನೂ ಸಿಕ್ಕಲಿಲ್ಲ; ಆದಾಗ್ಯೂ ನಿನ್ನ ಮಾತಿನಂತೆ ನಾನು ಬಲೆಯನ್ನು ಬೀಸುತ್ತೇನೆ ಎಂದು ಹೇಳಿದನು.
5:6b.LUK.005.006 ಅವರು ಅದರಂತೆ ಮಾಡಿ ವಿಾನಿನ ದೊಡ್ಡ ರಾಶಿಯನ್ನು ಹಿಡಿದರು. ಅವರ ಬಲೆಯು ಹರಿಯಿತು.
5:7b.LUK.005.007 ಆಗ ಬೇರೆ ದೋಣಿ ಯಲ್ಲಿದ್ದ ತಮ್ಮ ಪಾಲುಗಾರರು ಬಂದು ತಮಗೆ ಸಹಾಯ ಮಾಡಬೇಕೆಂದು ಅವರು ಸನ್ನೆ ಮಾಡಿದರು; ಮತ್ತು ಅವರು ಬಂದು ಎರಡು ದೋಣಿಗಳನ್ನು ತುಂಬಿ ಸಲಾಗಿ ಅವು ಮುಳುಗಲಾರಂಭಿಸಿದವು.
5:8b.LUK.005.008 ಸೀಮೋನ್ ಪೇತ್ರನು ಅದನ್ನು ಕಂಡಾಗ ಯೇಸುವಿನ ಮೊಣಕಾಲಿಗೆ ಬಿದ್ದು--ನನ್ನನ್ನು ಬಿಟ್ಟು ಹೋಗು; ಓ ಕರ್ತನೇ, ನಾನು ಪಾಪಾತ್ಮನು ಅಂದನು.
5:9b.LUK.005.009 ಯಾಕಂದರೆ ಅವರು ಹಿಡಿದ ವಿಾನುಗಳ ರಾಶಿಗಾಗಿ ಅವನೂ ಅವನ ಸಂಗಡ ಇದ್ದವರೂ ವಿಸ್ಮಯಗೊಂಡಿದ್ದರು.
5:10b.LUK.005.010 ಸೀಮೋನನ ಕೂಡ ಪಾಲುಗಾರರಾಗಿದ್ದ ಜೆಬೆದಾಯನ ಮಕ್ಕಳಾದ ಯಾಕೋಬ ಯೋಹಾನರೂ ಹಾಗೆಯೇ ವಿಸ್ಮಯ ಪಟ್ಟರು. ಆಗ ಯೇಸು ಸೀಮೋನನಿಗೆ--ಹೆದರಬೇಡ. ಇಂದಿನಿಂದ ನೀನು ಮನುಷ್ಯರನ್ನು ಹಿಡಿಯುವಿ ಅಂದನು.
5:11b.LUK.005.011 ಅವರು ತಮ್ಮ ದೋಣಿಗಳನ್ನು ದಡಕ್ಕೆ ತಂದಾಗ ಎಲ್ಲವನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.
5:12b.LUK.005.012 ತರುವಾಯ ಆತನು ಒಂದಾನೊಂದು ಪಟ್ಟಣ ದಲ್ಲಿದ್ದಾಗ ಇಗೋ, ತುಂಬಾ ಕುಷ್ಠವಿದ್ದ ಒಬ್ಬ ಮನುಷ್ಯನು ಯೇಸುವನ್ನು ನೋಡಿ ಬೋರಲ ಬಿದ್ದು ಆತನಿಗೆ--ಕರ್ತನೇ, ನಿನಗೆ ಮನಸ್ಸಿದ್ದರೆ ನೀನು ನನ್ನನ್ನು ಶುದ್ಧ ಮಾಡಬಲ್ಲೆ ಎಂದು ಆತನನ್ನು ಬೇಡಿಕೊಂಡನು.
5:13b.LUK.005.013 ಆತನು ತನ್ನ ಕೈಚಾಚಿ ಅವನನ್ನು ಮುಟ್ಟಿ ಅವ ನಿಗೆ--ನನಗೆ ಮನಸ್ಸುಂಟು; ನೀನು ಶುದ್ಧನಾಗು ಎಂದು ಹೇಳಿದನು. ಕೂಡಲೆ ಆ ಕುಷ್ಠವು ಅವನಿಂದ ಹೊರಟುಹೋಯಿತು.
5:14b.LUK.005.014 ಆತನು ಅವನಿಗೆ--ನೀನು ಯಾರಿಗೂ ಹೇಳಬಾರದು; ಆದರೆ ಹೋಗಿ ಜನರಿಗೆ ಸಾಕ್ಷಿಯಾಗಿರುವಂತೆ ಯಾಜಕನಿಗೆ ನಿನ್ನನ್ನು ತೋರಿಸಿ ಕೊಂಡು ನಿನ್ನ ಶುದ್ಧಾಚಾರಕ್ಕಾಗಿ ಮೋಶೆಯು ಅಪ್ಪಣೆ ಕೊಟ್ಟಂತೆ ಅರ್ಪಿಸು ಎಂದು ಆಜ್ಞಾಪಿಸಿದನು.
5:15b.LUK.005.015 ಆದರೂ ಆತನ ಕೀರ್ತಿಯು ಇನ್ನೂ ಹೆಚ್ಚಾಗಿ ದೂರದವರೆಗೂ ಹರಡಿತು; ದೊಡ್ಡ ಸಮೂಹಗಳು ಆತನ ಉಪದೇಶವನ್ನು ಕೇಳುವದಕ್ಕೂ ತಮ್ಮ ರೋಗಗಳನ್ನು ಆತನಿಂದ ವಾಸಿಮಾಡಿಸಿಕೊಳ್ಳು ವದಕ್ಕೂ ಕೂಡಿ ಬಂದರು.
5:16b.LUK.005.016 ಆತನಾದರೋ ತನ್ನನ್ನು ಪ್ರತ್ಯೇಕಿಸಿಕೊಂಡು ಅರಣ್ಯಕ್ಕೆ ಹೋಗಿ ಪ್ರಾರ್ಥಿಸಿದನು.
5:17b.LUK.005.017 ಇದಾದ ಮೇಲೆ ಒಂದಾನೊಂದು ದಿನ ಆತನು ಬೋಧಿಸುತ್ತಿದ್ದಾಗ ಗಲಿಲಾಯ ಯೂದಾಯ ಮತ್ತು ಯೆರೂಸಲೇಮಿನ ಪ್ರತಿಯೊಂದು ಊರಿನಿಂದ ಬಂದಿದ್ದ ಫರಿಸಾಯರೂ ನ್ಯಾಯಪ್ರಮಾಣದ ಪಂಡಿತರೂ ಅಲ್ಲಿ ಕೂತುಕೊಂಡಿದ್ದರು. ಕರ್ತನ ಶಕ್ತಿಯು ಅವರನ್ನು ಸ್ವಸ್ಥ ಮಾಡುವದಕ್ಕೆ ಸಿದ್ಧವಿತ್ತು.
5:18b.LUK.005.018 ಆಗ ಇಗೋ, ಪಾರ್ಶ್ವವಾಯು ರೋಗವಿದ್ದ ಒಬ್ಬ ಮನುಷ್ಯನನ್ನು ಕೆಲವರು ಹಾಸಿಗೆಯಲ್ಲಿ ಹೊತ್ತು ಕೊಂಡು ಬಂದು ಅವನನ್ನು ಒಳಗೆ ಆತನ ಎದುರಿಗೆ ತರುವ ವಿಧಾನವನ್ನು ಹುಡುಕಿದರು.
5:19b.LUK.005.019 ಆದರೆ ಅಲ್ಲಿದ್ದ ಜನಸಮೂಹದವರ ನಿಮಿತ್ತ ಅವರು ಅವನನ್ನು ಒಳಗೆ ತರುವ ಯಾವ ವಿಧಾನವನ್ನೂ ಕಾಣದೆ ಮನೆಯಮೇಲೆ ಹೋಗಿ ಹಂಚುಗಳನ್ನು ತೆಗೆದು ಅವನನ್ನು ಹಾಸಿಗೆಯೊಂದಿಗೆ ನಡುವೆ ಯೇಸುವಿನ ಮುಂದೆ ಇಳಿಸಿದರು.
5:20b.LUK.005.020 ಆಗ ಆತನು ಅವರ ನಂಬಿಕೆಯನ್ನು ನೋಡಿ ಅವನಿಗೆ-- ಮನುಷ್ಯನೇ, ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಎಂದು ಹೇಳಿದನು.
5:21b.LUK.005.021 ಆಗ ಶಾಸ್ತ್ರಿಗಳೂ ಫರಿ ಸಾಯರೂ--ದೇವದೂಷಣೆಗಳನ್ನು ಮಾಡುವದಕ್ಕೆ ಇವನು ಯಾರು? ದೇವರೊಬ್ಬನೇ ಹೊರತು ಪಾಪಗಳನ್ನು ಕ್ಷಮಿಸುವವರು ಯಾರು ಎಂದು ತಮ್ಮಲ್ಲಿ ಮಾತನಾಡಿಕೊಂಡರು.
5:22b.LUK.005.022 ಆದರೆ ಯೇಸು ಅವರ ಆಲೋಚನೆಗಳನ್ನು ತಿಳಿದು ಪ್ರತ್ಯುತ್ತರವಾಗಿ ಅವರಿಗೆ--ನೀವು ನಿಮ್ಮ ಹೃದಯಗಳಲ್ಲಿ ಅಂದು ಕೊಳ್ಳುತ್ತಿರುವದೇನು?
5:23b.LUK.005.023 ಯಾವದು ಸುಲಭ-- ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಅನ್ನುವದೋ? ಇಲ್ಲವೆ--ಎದ್ದು ನಡೆ ಅನ್ನುವದೋ?
5:24b.LUK.005.024 ಆದರೆ ಮನುಷ್ಯಕುಮಾರನಿಗೆ ಪಾಪಗಳನ್ನು ಕ್ಷಮಿಸುವದಕ್ಕೆ ಭೂಮಿಯ ಮೇಲೆ ಅಧಿಕಾರವುಂಟೆಂದು ನೀವು ತಿಳಿಯಬೇಕು (ಎಂದು ಹೇಳಿ ಆ ಪಾರ್ಶ್ವವಾಯು ರೋಗಿಗೆ)--ಎದ್ದು ನಿನ್ನ ಹಾಸಿಗೆಯನ್ನು ತಕ್ಕೊಂಡು ನಿನ್ನ ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ ಅಂದನು.
5:25b.LUK.005.025 ಕೂಡಲೆ ಅವನು ಅವರ ಮುಂದೆ ಎದ್ದು ತಾನು ಮಲಗಿದ್ದ ಹಾಸಿಗೆಯನ್ನು ಎತ್ತಿಕೊಂಡು ದೇವರನ್ನು ಕೊಂಡಾಡುತ್ತಾ ತನ್ನ ಸ್ವಂತ ಮನೆಗೆ ಹೊರಟುಹೋದನು.
5:26b.LUK.005.026 ಅಲ್ಲಿದ್ದವ ರೆಲ್ಲರೂ ವಿಸ್ಮಯಗೊಂಡು ದೇವರನ್ನು ಮಹಿಮೆ ಪಡಿಸಿದರು. ಮತ್ತು ಅವರು ಭಯದಿಂದ ಕೂಡಿದ ವರಾಗಿ--ನಾವು ಈ ದಿನ ಅಪೂರ್ವವಾದವುಗಳನ್ನು ನೋಡಿದ್ದೇವೆ ಅಂದರು.
5:27b.LUK.005.027 ಇವುಗಳಾದ ಮೇಲೆ ಆತನು ಮುಂದೆ ಹೋಗಿ ತೆರಿಗೆಯ ಕಚೇರಿಯಲ್ಲಿ ಕೂತುಕೊಂಡಿದ್ದ ಲೇವಿಯ ನೆಂಬ ಹೆಸರುಳ್ಳ ಒಬ್ಬ ಸುಂಕದವನನ್ನು ನೋಡಿ ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು.
5:28b.LUK.005.028 ಅವನು ಎಲ್ಲವನ್ನು ಬಿಟ್ಟು ಎದ್ದು ಆತನನ್ನು ಹಿಂಬಾಲಿಸಿದನು.
5:29b.LUK.005.029 ತರುವಾಯ ಲೇವಿಯು ತನ್ನ ಸ್ವಂತ ಮನೆಯಲ್ಲಿ ಆತನಿಗೆ ದೊಡ್ಡ ಔತಣವನ್ನು ಮಾಡಿಸಲು ಸುಂಕದವರು ಮತ್ತು ಬೇರೆ ಬಹಳ ಜನರು ಅವರೊಂದಿಗೆ ಕೂತುಕೊಂಡರು.
5:30b.LUK.005.030 ಆದರೆ ಅವರ ಶಾಸ್ತ್ರಿಗಳೂ ಫರಿಸಾಯರೂ ಆತನ ಶಿಷ್ಯರಿಗೆ ವಿರೋಧವಾಗಿ ಗುಣುಗುಟ್ಟುತ್ತಾ--ನೀವು ಯಾಕೆ ಸುಂಕದವರ ಮತ್ತು ಪಾಪಿಗಳ ಸಂಗಡ ತಿಂದು ಕುಡಿಯುತ್ತೀರಿ ಎಂದು ಕೇಳಿದರು.
5:31b.LUK.005.031 ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಕ್ಷೇಮದಲ್ಲಿ ಇರುವವರಿಗೆ ಅಲ್ಲ, ಆದರೆ ಕ್ಷೇಮವಿಲ್ಲದವರಿಗೆ ವೈದ್ಯನು ಬೇಕು.
5:32b.LUK.005.032 ನಾನು ನೀತಿವಂತರನ್ನಲ್ಲ, ಆದರೆ ಪಾಪಿಗಳನ್ನು ಮಾನಸಾಂತರಕ್ಕೆ ಕರೆಯುವದಕ್ಕಾಗಿ ಬಂದೆನು ಎಂದು ಹೇಳಿದನು.
5:33b.LUK.005.033 ಅವರು ಆತನಿಗೆ--ಯೋಹಾನನ ಶಿಷ್ಯರು ಪದೇ ಪದೇ ಉಪವಾಸವಿದ್ದು ಪ್ರಾರ್ಥನೆಗಳನ್ನು ಮಾಡುತ್ತಾರೆ; ಅದರಂತೆಯೇ ಫರಿಸಾಯರ ಶಿಷ್ಯರೂ ಮಾಡುತ್ತಾರೆ; ಆದರೆ ನಿನ್ನವರು ಯಾಕೆ ತಿಂದು ಕುಡಿಯುತ್ತಾರೆ ಎಂದು ಹೇಳಿದರು.
5:34b.LUK.005.034 ಆತನು ಅವರಿಗೆ--ಮದುಮಗನು ಮದುವೆ ಮನೆಯ ಮಕ್ಕಳ ಜೊತೆಯಲ್ಲಿ ಇರುವಾಗ ಅವರಿಗೆ ಉಪವಾಸ ಮಾಡಿಸುವಂತೆ ನಿಮ್ಮಿಂದಾದೀತೇ?
5:35b.LUK.005.035 ಆದರೆ ಮದುಮಗನು ಅವ ರಿಂದ ತೆಗೆಯಲ್ಪಡುವ ದಿವಸಗಳು ಬರುವವು; ಆಗ ಆ ದಿವಸಗಳಲ್ಲಿ ಅವರು ಉಪವಾಸ ಮಾಡುವರು ಎಂದು ಹೇಳಿದನು.
5:36b.LUK.005.036 ಆತನು ಅವರಿಗೆ ಒಂದು ಸಾಮ್ಯವನ್ನು ಸಹ ಹೇಳಿದ್ದೇನಂದರೆ--ಹಳೇ ವಸ್ತ್ರಕ್ಕೆ ಹೊಸ ಬಟ್ಟೆಯ ತುಂಡನ್ನು ಯಾರೂ ಹಚ್ಚುವದಿಲ್ಲ; ಹಚ್ಚಿದರೆ ಹೊಸದು ಹರಿದು ಹೋಗುವದು ಮತ್ತು ಹೊಸದರಿಂದ ತೆಗೆದ ತುಂಡು ಹಳೇದರೊಂದಿಗೆ ಸರಿಬೀಳುವದಿಲ್ಲ.
5:37b.LUK.005.037 ಯಾರೂ ಹಳೇಬುದ್ದಲಿಗಳಲ್ಲಿ ಹೊಸದ್ರಾಕ್ಷಾರಸವನ್ನು ಹಾಕುವದಿಲ್ಲ; ಹಾಕಿದರೆ ಹೊಸದ್ರಾಕ್ಷಾರಸವು ಬುದ್ದಲಿಗಳನ್ನು ಒಡೆಯುವದ ರಿಂದ ಅದು ಚೆಲ್ಲಿ ಹೋಗುವದು ಮತ್ತು ಬುದ್ದಲಿಗಳು ಹಾಳಾಗಿ ಹೋಗುವವು.
5:38b.LUK.005.038 ಆದರೆ ಹೊಸದ್ರಾಕ್ಷಾ ರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು; ಹೀಗೆ ಅವೆರಡೂ ಭದ್ರವಾಗಿರುವವು.ಯಾವನಾದರೂ ಹಳೇದ್ರಾಕ್ಷಾರಸವನ್ನು ಕುಡಿದ ಕೂಡಲೆ ಹೊಸದನ್ನು ಅಪೇಕ್ಷಿಸುವದಿಲ್ಲ; ಯಾಕಂದರೆ ಅವನು--ಹಳೇದೇ ಉತ್ತಮ ಅನ್ನುವನು.
5:39b.LUK.005.039 ಯಾವನಾದರೂ ಹಳೇದ್ರಾಕ್ಷಾರಸವನ್ನು ಕುಡಿದ ಕೂಡಲೆ ಹೊಸದನ್ನು ಅಪೇಕ್ಷಿಸುವದಿಲ್ಲ; ಯಾಕಂದರೆ ಅವನು--ಹಳೇದೇ ಉತ್ತಮ ಅನ್ನುವನು.
6
6:1b.LUK.006.001 ಇದಾದ ಮೇಲೆ ಮೊದಲನೇ ಸಬ್ಬತ್ತಿನ ತರುವಾಯ ಎರಡನೇ ಸಬ್ಬತ್ತಿನಲ್ಲಿ ಆತನು ಪೈರಿನ ಹೊಲಗಳನ್ನು ದಾಟಿಹೋಗುತ್ತಿದ್ದನು. ಆಗ ಆತನ ಶಿಷ್ಯರು ತೆನೆಗಳನ್ನು ಕಿತ್ತು ತಮ್ಮ ಕೈಗಳಲ್ಲಿ ಹೊಸಗಿಕೊಂಡು ತಿನ್ನುತ್ತಿದ್ದರು.
6:2b.LUK.006.002 ಆದರೆ ಫರಿಸಾಯ ರಲ್ಲಿ ಕೆಲವರು ಅವರಿಗೆ--ಸಬ್ಬತ್ ದಿನಗಳಲ್ಲಿ ಮಾಡ ಬಾರದ್ದನ್ನು ನೀವು ಯಾಕೆ ಮಾಡುತ್ತೀರಿ ಅಂದರು.
6:3b.LUK.006.003 ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ದಾವೀದನೂ ತನ್ನ ಜೊತೆ ಇದ್ದವರೂ ಹಸಿದಾಗ
6:4b.LUK.006.004 ಅವನು ದೇವರ ಮನೆಯೊಳಗೆ ಹೋಗಿ ಯಾಜಕರು ಹೊರತು ಬೇರೆಯವರು ತಿನ್ನುವದು ನ್ಯಾಯವಲ್ಲದ ಸಮ್ಮುಖ ರೊಟ್ಟಿಯನ್ನು ತೆಗೆದುಕೊಂಡು ತಿಂದು ತನ್ನ ಜೊತೆಯಲ್ಲಿದ್ದವರಿಗೆ ಸಹ ಹೇಗೆ ಕೊಟ್ಟನೆಂಬದನು ನೀವು ಓದಲಿಲ್ಲವೇ ಅಂದನು.
6:5b.LUK.006.005 ಆತನು ಅವ ರಿಗೆ--ಮನುಷ್ಯಕುಮಾರನು ಸಬ್ಬತ್ತಿಗೂ ಒಡೆಯನಾಗಿ ದ್ದಾನೆ ಅಂದನು.
6:6b.LUK.006.006 ಇದಾದ ಮೇಲೆ ಇನ್ನೊಂದು ಸಬ್ಬತ್ತಿನಲ್ಲಿ ಸಹ ಆತನು ಸಭಾಮಂದಿರದೊಳಕ್ಕೆ ಪ್ರವೇಶಿಸಿ ಬೋಧಿಸಿ ದನು; ಅಲ್ಲಿ ಬಲಗೈ ಬತ್ತಿದ ಒಬ್ಬ ಮನುಷ್ಯನಿದ್ದನು.
6:7b.LUK.006.007 ಆಗ ಶಾಸ್ತ್ರಿಗಳೂ ಫರಿಸಾಯರೂ ಆತನಿಗೆ ವಿರೋಧ ವಾಗಿ ತಪ್ಪು ಕಂಡುಹಿಡಿಯಬೇಕೆಂದು ಆತನು ಆ ಸಬ್ಬತ್ ದಿನದಲ್ಲಿ ಅವನನ್ನು ಸ್ವಸ್ಥಮಾಡುವನೇನೋ ಎಂದು ಕಾಯುತ್ತಿದ್ದರು.
6:8b.LUK.006.008 ಆದರೆ ಆತನು ಅವರ ಆಲೋಚನೆಗಳನ್ನು ತಿಳಿದುಕೊಂಡು ಕೈ ಬತ್ತಿದವನಾದ ಆ ಮನುಷ್ಯನಿಗೆ--ಎದ್ದು ನಡುವೆ ನಿಂತುಕೋ ಅಂದಾಗ ಅವನು ಎದ್ದು ನಿಂತುಕೊಂಡನು.
6:9b.LUK.006.009 ತರು ವಾಯ ಯೇಸು ಅವರಿಗೆ--ನಿಮಗೆ ಒಂದು ಸಂಗತಿ ಯನ್ನು ನಾನು ಕೇಳುತ್ತೇನೆ; ಸಬ್ಬತ್ ದಿನಗಳಲ್ಲಿ ಒಳ್ಳೇದನ್ನು ಮಾಡುವದು ನ್ಯಾಯವೋ? ಇಲ್ಲವೆ ಕೆಟ್ಟದ್ದು ಮಾಡುವದೋ? ಪ್ರಾಣವನ್ನು ರಕ್ಷಿಸುವದೋ, ಇಲ್ಲವೆ ಅದನ್ನು ನಾಶಮಾಡುವದೋ ಅಂದನು.
6:10b.LUK.006.010 ಆತನು ಅವರೆಲ್ಲರ ಸುತ್ತಲೂ ನೋಡಿ ಆ ಮನುಷ್ಯನಿಗೆ--ನಿನ್ನ ಕೈ ಮುಂದಕ್ಕೆ ಚಾಚು ಅಂದನು. ಅವನು ಹಾಗೆಯೇ ಮಾಡಿದನು; ಆಗ ಅವನ ಕೈ ಗುಣವಾಗಿ ಮತ್ತೊಂದರಂತೆ ಆಯಿತು.
6:11b.LUK.006.011 ಆಗ ಅವರು ಕೋಪದಿಂದ ತುಂಬಿದವರಾಗಿ ಯೇಸುವಿಗೆ ತಾವು ಏನು ಮಾಡಬೇಕೆಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
6:12b.LUK.006.012 ಇದಾದ ಮೇಲೆ ಆತನು ಆ ದಿವಸಗಳಲ್ಲಿ ಪ್ರಾರ್ಥಿಸುವದಕ್ಕಾಗಿ ಒಂದು ಬೆಟ್ಟಕ್ಕೆ ಹೋಗಿ ರಾತ್ರಿ ಯೆಲ್ಲಾ ದೇವರಿಗೆ ಪ್ರಾರ್ಥಿಸಿದನು.
6:13b.LUK.006.013 ಬೆಳಗಾದ ಮೇಲೆ ಆತನು ತನ್ನ ಶಿಷ್ಯರನ್ನು ತನ್ನ ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡದ್ದಲ್ಲದೆ ಅವರಿಗೆ ಅಪೊಸ್ತಲರೆಂದು ಹೆಸರಿಟ್ಟನು.
6:14b.LUK.006.014 ಅವರು (ಆತನು ಪೇತ್ರನೆಂದು ಕರೆದ) ಸೀಮೋನ, ಅವನ ಸಹೋದರನಾದ ಅಂದ್ರೆಯ, ಯಾಕೋಬ,ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ,
6:15b.LUK.006.015 ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ಮತಾಭಿಮಾನಿಯೆಂದು ಕರೆಯಲ್ಪಟ್ಟ ಸೀಮೋನ,
6:16b.LUK.006.016 ಯಾಕೋಬನ ಸಹೋದರನಾದ ಯೂದ, ಮತ್ತು ದ್ರೋಹಿಯಾದ ಇಸ್ಕರಿಯೋತ ಯೂದ ಎಂಬವರೇ.
6:17b.LUK.006.017 ಆತನು ಅವರೊಂದಿಗೆ ಕೆಳಗಿಳಿದು ಸಮ ಭೂಮಿಯ ಮೇಲೆ ನಿಂತಿದ್ದಾಗ ಆತನ ಶಿಷ್ಯರ ಗುಂಪು ಅಲ್ಲದೆ ಯೂದಾಯ ಯೆರೂಸಲೇಮಿನಿಂದಲೂ ತೂರ್ ಸೀದೋನಿನ ಸಮುದ್ರತೀರದಿಂದಲೂ ಆತನ ಉಪದೇಶವನ್ನು ಕೇಳುವದಕ್ಕೂ ತಮ್ಮ ರೋಗಗಳಿಂದ ಸ್ವಸ್ಥರಾಗುವದಕ್ಕೂ ಜನರು ದೊಡ್ಡ ಸಮೂಹವಾಗಿ ಬಂ
6:18b.LUK.006.018 ಅಶುದ್ಧಾತ್ಮಗಳಿಂದ ಪೀಡಿತರಾದವರೂ ಬಂದು ಸ್ವಸ್ಥರಾದರು.
6:19b.LUK.006.019 ಆಗ ಸಮೂಹವೆಲ್ಲಾ ಆತ ನನ್ನು ಮುಟ್ಟಬೇಕೆಂದು ಪ್ರಯತ್ನಿಸಿದರು; ಯಾಕಂದರೆ ಆತನಿಂದ ಶಕ್ತಿಯು ಹೊರಟು ಅವರೆಲ್ಲರನ್ನು ಸ್ವಸ್ಥ ಮಾಡಿತು.
6:20b.LUK.006.020 ಆತನು ತನ್ನ ಕಣ್ಣುಗಳನ್ನೆತ್ತಿ ತನ್ನ ಶಿಷ್ಯರ ಕಡೆಗೆ ನೋಡಿ--ಬಡವರಾದ ನೀವು ಧನ್ಯರು; ಯಾಕಂದರೆ ದೇವರ ರಾಜ್ಯವು ನಿಮ್ಮದೇ.
6:21b.LUK.006.021 ಈಗ ಹಸಿದವರಾದ ನೀವು ಧನ್ಯರು; ಯಾಕಂದರೆ ನೀವು ತೃಪ್ತಿ ಹೊಂದುವಿರಿ. ಈಗ ಅಳುವವರಾದ ನೀವು ಧನ್ಯರು; ಯಾಕಂದರೆ ನೀವು ನಗುವಿರಿ.
6:22b.LUK.006.022 ಮನುಷ್ಯಕುಮಾರನ ನಿಮಿತ್ತ ಜನರು ನಿಮ್ಮನ್ನು ಹಗೆಮಾಡಿ ನಿಮ್ಮನ್ನು ಬಹಿಷ್ಕರಿಸಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದ್ದೆಂದು ತೆಗೆದುಹಾಕಿದರೆ ನೀವು ಧನ್ಯರು.
6:23b.LUK.006.023 ಆ ದಿನದಲ್ಲಿ ನೀವು ಸಂತೋಷ ಪಡಿರಿ. ಉಲ್ಲಾಸದಿಂದ ಕುಣಿದಾಡಿರಿ; ಯಾಕಂದರೆ ಇಗೋ, ಪರಲೋಕದಲ್ಲಿ ನಿಮ್ಮ ಬಹುಮಾನವು ದೊಡ್ಡದು; ಅವರ ಪಿತೃಗಳು ಪ್ರವಾದಿಗಳಿಗೆ ಅದೇ ರೀತಿಯಲ್ಲಿ ಮಾಡಿದರು.
6:24b.LUK.006.024 ಆದರೆ ಐಶ್ವರ್ಯವಂತರೇ, ನಿಮಗೆ ಅಯ್ಯೋ! ನೀವು ನಿಮ್ಮ ಆದರಣೆಯನ್ನು ಹೊಂದಿದ್ದೀರಿ.
6:25b.LUK.006.025 ತೃಪ್ತಿಯಿಂದಿರುವವರೇ, ನಿಮಗೆ ಅಯ್ಯೋ! ಯಾಕಂದರೆ ನಿಮಗೆ ಹಸಿವೆಯಾಗುವದು. ಈಗ ನಗುವವರೇ, ನಿಮಗೆ ಅಯ್ಯೋ! ನೀವು ಶೋಕಿಸಿ ಅಳುವಿರಿ.
6:26b.LUK.006.026 ಎಲ್ಲಾ ಜನರು ನಿಮ್ಮ ವಿಷಯದಲ್ಲಿ ಒಳ್ಳೇದಾಗಿ ಮಾತನಾಡಿದರೆ ನಿಮಗೆ ಅಯ್ಯೋ! ಅವರ ಪಿತೃಗಳು ಸುಳ್ಳು ಪ್ರವಾದಿಗಳಿಗೆ ಹಾಗೆಯೇ ಮಾಡಿದರು.
6:27b.LUK.006.027 ಆದರೆ ಕೇಳುವವರಾದ ನಿಮಗೆ ನಾನು ಹೇಳುವ ದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ.
6:28b.LUK.006.028 ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ ಮತ್ತು ನಿಮ್ಮನ್ನು ಅವಮಾನ ಪಡಿಸುವವರಿಗೋಸ್ಕರ ಪ್ರಾರ್ಥಿಸಿರಿ.
6:29b.LUK.006.029 ಒಂದು ಕೆನ್ನೆಯ ಮೇಲೆ ನಿನ್ನನ್ನು ಹೊಡೆಯುವವನಿಗೆ ಮತ್ತೊಂದನ್ನು ಸಹ ಕೊಡು; ನಿನ್ನ ಮೇಲಂಗಿಯನ್ನು ತಕ್ಕೊಳ್ಳುವವನಿಗೆ ನಿನ್ನ ಒಳಂಗಿಯನ್ನು ತಡೆಯಬೇಡ.
6:30b.LUK.006.030 ನಿನ್ನಿಂದ ಕೇಳುವ ಪ್ರತಿ ಮನುಷ್ಯನಿಗೆ ಕೊಡು; ನಿನ್ನ ಸೊತ್ತನ್ನು ತಕ್ಕೊಳ್ಳುವವನಿಂದ ಅವುಗಳನ್ನು ತಿರಿಗಿ ಕೇಳಬೇಡ.
6:31b.LUK.006.031 ಜನರು ನಿಮಗೆ ಏನು ಮಾಡಬೇಕೆಂದು ನೀವು ಕೋರುತ್ತೀರೋ ನೀವು ಸಹ ಅವರಿಗೆ ಅದ ರಂತೆಯೇ ಮಾಡಿರಿ.
6:32b.LUK.006.032 ನಿಮ್ಮನ್ನು ಪ್ರೀತಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ತಮ್ಮನ್ನು ಪ್ರೀತಿಸುವವ ರನ್ನೇ ಪ್ರೀತಿಸುತ್ತಾರೆ.
6:33b.LUK.006.033 ನಿಮಗೆ ಒಳ್ಳೇದನ್ನು ಮಾಡು ವವರಿಗೆ ನೀವು ಒಳ್ಳೇದನ್ನು ಮಾಡಿದರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ಅದರಂತೆಯೇ ಮಾಡುತ್ತಾರೆ.
6:34b.LUK.006.034 ಯಾರಿಂದ ತಿರಿಗಿ ಪಡಕೊಳ್ಳಬೇಕೆಂದು ನಿರೀಕ್ಷಿಸುತ್ತಿರೋ ಅಂಥವರಿಗೆ ಸಾಲಕೊಟ್ಟರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ಹಾಗೆಯೇ ತಾವು ಕೊಟ್ಟಷ್ಟು ತಿರಿಗಿ ಪಡೆಯುವಂತೆ ಪಾಪಿಗಳಿಗೆ ಸಾಲ ಕೊಡುತ್ತಾರೆ.
6:35b.LUK.006.035 ಆದರೆ ನೀವು ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಮತ್ತು ಒಳ್ಳೇದನ್ನು ಮಾಡಿರಿ. ಏನನ್ನೂ ತಿರಿಗಿ ನಿರೀಕ್ಷಿಸದೆ ಸಾಲ ಕೊಡಿರಿ; ಆಗ ನಿಮ್ಮ ಬಹುಮಾನವು ದೊಡ್ಡದಾಗಿರುವದು; ನೀವು ಮಹೋ ನ್ನತನ ಮಕ್ಕಳಾಗಿರುವಿರಿ; ಯಾಕಂದರೆ ಆತನು ಕೃತಜ್ಞತೆ ಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವನಾಗಿ ದ್ದಾನೆ,
6:36b.LUK.006.036 ನಿಮ್ಮ ತಂದೆಯು ಕರುಣೆಯುಳ್ಳವನಾಗಿರುವ ಪ್ರಕಾರ ನೀವೂ ಕರುಣೆಯುಳ್ಳವರಾಗಿರ್ರಿ.
6:37b.LUK.006.037 ತೀರ್ಪು ಮಾಡಬೇಡಿರಿ; ಆಗ ನಿಮಗೂ ತೀರ್ಪಾಗುವದಿಲ್ಲ. ಖಂಡಿಸಬೇಡಿರಿ; ಆಗ ನಿಮಗೂ ಖಂಡನೆಯಾಗುವದಿಲ್ಲ. ಕ್ಷಮಿಸಿರಿ; ಆಗ ನಿಮಗೂ ಕ್ಷಮಿಸಲ್ಪಡುವದು.
6:38b.LUK.006.038 ಕೊಡಿರಿ, ಆಗ ನಿಮಗೂ ಕೊಡ ಲ್ಪಡುವದು. ಒಳ್ಳೆಯ ಅಳತೆ ಒತ್ತಿ ಅಲ್ಲಾಡಿಸಿ ಹೊರಗೆ ಚೆಲ್ಲುವಂತೆ ಮನುಷ್ಯರು ನಿಮ್ಮ ಉಡಿಲಲ್ಲಿ ಹಾಕುವರು; ಯಾಕಂದರೆ ನೀವು ಅಳೆಯುವ ಅಳತೆಯಿಂದಲೇ ನಿಮಗೂ ತಿರಿಗಿ ಅಳೆಯಲ್ಪಡುವದು.
6:39b.LUK.006.039 ಆತನು ಒಂದು ಸಾಮ್ಯವನ್ನು ಅವರಿಗೆ ಹೇಳಿ ದನು--ಕುರುಡನು ಕುರುಡನನ್ನು ನಡಿಸಬಲ್ಲನೋ? (ನಡಿಸಿದರೆ) ಅವರಿಬ್ಬರೂ ಕುಣಿಯಲ್ಲಿ ಬೀಳುವದಿ ಲ್ಲವೋ?
6:40b.LUK.006.040 ತನ್ನ ಗುರುವಿಗಿಂತ ಶಿಷ್ಯನು ಹೆಚ್ಚಿನವನಲ್ಲ; ಆದರೆ ಪರಿಪೂರ್ಣನಾಗಿರುವ ಪ್ರತಿಯೊಬ್ಬನು ತನ್ನ ಗುರುವಿನಂತೆ ಇರುವನು.
6:41b.LUK.006.041 ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ನೀನು ತಿಳಿದುಕೊಳ್ಳದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ರವೆಯನ್ನು ಯಾಕೆ ನೋಡುತ್ತೀ?
6:42b.LUK.006.042 ಇಲ್ಲವೆ ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ನೀನು ನೋಡದೆ ನಿನ್ನ ಸಹೋದರನಿಗೆ--ಸಹೋದರನೇ, ನಿನ್ನ ಕಣ್ಣಿನಲ್ಲಿ ರುವ ರವೆಯನ್ನು ತೆಗೆಯುವೆನೆಂದು ನೀನು ಹೇಗೆ ಹೇಳುವದು? ಕಪಟಿಯೇ, ಮೊದಲು ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ತೆಗೆದುಹಾಕು; ಆಮೇಲೆ ನಿನ್ನ ಸಹೊ
6:43b.LUK.006.043 ಒಳ್ಳೇಮರವು ಕೆಟ್ಟ ಫಲವನ್ನು ಫಲಿಸುವದಿಲ್ಲ; ಇಲ್ಲವೆ ಕೆಟ್ಟಮರವು ಒಳ್ಳೇಫಲವನ್ನು ಫಲಿಸುವದಿಲ್ಲ.
6:44b.LUK.006.044 ಪ್ರತಿಯೊಂದು ಮರವು ಅದರ ಫಲದಿಂದಲೇ ಗೊತ್ತಾಗುವದು. ಯಾಕಂದರೆ ಮುಳ್ಳುಗಳಲ್ಲಿ ಮನುಷ್ಯರು ಅಂಜೂರ ಗಳನ್ನು ಕೂಡಿಸುವದಿಲ್ಲ; ಇಲ್ಲವೆ ಗಜ್ಜುಗದ ಪೊದೆಯಲ್ಲಿ ದ್ರಾಕ್ಷೇಗಳನ್ನು ಕೂಡಿಸುವದಿಲ್ಲ.
6:45b.LUK.006.045 ಒಳ್ಳೇಮನುಷ್ಯನು ತನ್ನ ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯದನ್ನೇ ಹೊರಗೆ ತರುತ್ತಾನೆ; ಆದರೆ ಕೆಟ್ಟಮನುಷ್ಯನು ತನ್ನ ಹೃದಯದ ಕೆಟ್ಟಬೊಕ್ಕಸದಿಂದ ಕೆಟ್ಟದ್ದನ್ನೇ ಹೊರಗೆ ತರುತ್ತಾನೆ. ಯಾಕಂದರೆ ಹೃದಯದ ಸಮೃದ್ಧಿಯಿಂದ ಅವನ ಬಾಯಿ ಮಾತನಾಡುತ್ತದೆ.
6:46b.LUK.006.046 ನನ್ನನ್ನು ನೀವು--ಕರ್ತನೇ, ಕರ್ತನೇ ಎಂದು ಕರೆದು ನಾನು ಹೇಳುವವುಗಳನ್ನು ನೀವು ಮಾಡದೆ ಇರುವದು ಯಾಕೆ?
6:47b.LUK.006.047 ಯಾವನು ನನ್ನ ಬಳಿಗೆ ಬಂದು ನಾನು ಹೇಳುವವುಗಳನ್ನು ಕೇಳಿ ಅವುಗಳನ್ನು ಮಾಡು ತ್ತಾನೋ ಅವನು ಯಾರಿಗೆ ಸಮಾನನಾಗಿದ್ದಾನೆಂದು ನಾನು ನಿಮಗೆ ತೋರಿಸುತ್ತೇನೆ.
6:48b.LUK.006.048 ಅವನು ಆಳವಾಗಿ ಅಗಿದು ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ ಮನೆಯನ್ನು ಕಟ್ಟಿದ ಮನುಷ್ಯನಿಗೆ ಸಮಾನನಾಗಿದ್ದಾನೆ; ಪ್ರಳಯವು ಎದ್ದು ಪ್ರವಾಹವು ಆ ಮನೆಗೆ ರಭಸ ವಾಗಿ ಬಡಿದರೂ ಅದನ್ನು ಕದಲಿಸಲಿಕ್ಕಾಗದೆ ಹೋಯಿತು; ಯಾಕಂದರೆ ಅದು ಬಂಡೆಯ ಮೇಲೆ ಕಟ್ಟಲ್ಪಟ್ಟಿತು.ಆದರೆ (ನನ್ನ ಮಾತುಗಳನ್ನು) ಕೇಳಿ ಅದರಂತೆ ಮಾಡದೆ ಇರುವವನು ಅಸ್ತಿವಾರ ವಿಲ್ಲದೆ ಮಣ್ಣಿನ ಮೇಲೆ ಮನೆಯನ್ನು ಕಟ್ಟಿದ ಮನುಷ್ಯನಿಗೆ ಹೋಲಿಕೆಯಾಗಿದ್ದಾನೆ; ಪ್ರವಾಹವು ಅದಕ್ಕೆ ರಭಸವಾಗಿ ಬಡಿದದ್ದರಿಂದ ಕೂಡಲೆ ಅದು ಬಿತ್ತು; ಇದರಿಂದ ಆ ಮನೆಯ ನಾಶನವು ದೊಡ್ಡದಾಗಿತ್ತು.
6:49b.LUK.006.049 ಆದರೆ (ನನ್ನ ಮಾತುಗಳನ್ನು) ಕೇಳಿ ಅದರಂತೆ ಮಾಡದೆ ಇರುವವನು ಅಸ್ತಿವಾರ ವಿಲ್ಲದೆ ಮಣ್ಣಿನ ಮೇಲೆ ಮನೆಯನ್ನು ಕಟ್ಟಿದ ಮನುಷ್ಯನಿಗೆ ಹೋಲಿಕೆಯಾಗಿದ್ದಾನೆ; ಪ್ರವಾಹವು ಅದಕ್ಕೆ ರಭಸವಾಗಿ ಬಡಿದದ್ದರಿಂದ ಕೂಡಲೆ ಅದು ಬಿತ್ತು; ಇದರಿಂದ ಆ ಮನೆಯ ನಾಶನವು ದೊಡ್ಡದಾಗಿತ್ತು.
7
7:1b.LUK.007.001 ತನ್ನ ಎಲ್ಲಾ ಮಾತುಗಳನ್ನು ಜನರೆಲ್ಲರೂ ಕೇಳುವಂತೆ ಹೇಳಿ ಮುಗಿಸಿದ ಮೇಲೆ ಆತನು ಕಪೆರ್ನೌಮಿನಲ್ಲಿ ಪ್ರವೇಶಿಸಿದನು.
7:2b.LUK.007.002 ಆಗ ಒಬ್ಬ ಶತಾಧಿಪತಿಗೆ ಪ್ರಿಯನಾಗಿದ್ದ ಆಳು ಅಸ್ವಸ್ಥನಾಗಿ ಸಾಯುವಹಾಗಿದ್ದನು.
7:3b.LUK.007.003 ಅವನು ಯೇಸುವಿನ ವಿಷಯ ಕೇಳಿದಾಗ ಆತನು ಬಂದು ತನ್ನ ಆಳನ್ನು ಗುಣ ಮಾಡಬೇಕೆಂದು ಬೇಡಿಕೊಳ್ಳುವಂತೆ ಯೆಹೂದ್ಯರ ಹಿರಿಯರನ್ನು ಆತನ ಬಳಿಗೆ ಕಳುಹಿಸಿದನು.
7:4b.LUK.007.004 ಅವರು ಯೇಸುವಿನ ಬಳಿಗೆ ಬಂದು ಆತನಿಗೆ ಒತ್ತಾಯ ಮಾಡಿ--ನೀನು (ಅವನ ಆಳನ್ನು) ಸ್ವಸ್ಥಮಾಡಬೇಕು; ಯಾಕಂದರೆ ಅವನು ಯೋಗ್ಯನಾಗಿದ್ದಾನೆ.
7:5b.LUK.007.005 ಅವನು ನಮ್ಮ ಜನಾಂಗವನ್ನು ಪ್ರೀತಿಸುವದಲ್ಲದೆ ನಮಗಾಗಿ ಒಂದು ಸಭಾಮಂದಿರವನ್ನು ಕಟ್ಟಿಸಿದ್ದಾನೆ ಎಂದು ಬೇಡಿಕೊಂಡರು.
7:6b.LUK.007.006 ಆಗ ಯೇಸು ಅವರೊಂದಿಗೆ ಹೋದನು. ಆತನು ಮನೆಗೆ ಇನ್ನೂ ಸ್ವಲ್ಪ ದೂರ ಇರುವಾಗ ಶತಾಧಿಪತಿಯು ಸ್ನೇಹಿತರನ್ನು ಆತನ ಬಳಿಗೆ ಕಳುಹಿಸಿ ಆತನಿಗೆ--ಕರ್ತನೇ, ನಿನ್ನನ್ನು ತೊಂದರೆಪಡಿಸಿ ಕೊಳ್ಳಬೇಡ; ಯಾಕಂದರೆ ನೀನು ನನ್ನ ಮನೆಯಲ್ಲಿ ಪ್ರವೇಶಿಸುವದಕ್ಕೆ ನಾನು ಯೋಗ್ಯನಲ್ಲ.
7:7b.LUK.007.007 ಇಲ್ಲವೆ ನಾನೂ ನಿನ್ನ ಬಳಿಗೆ ಬರುವದಕ್ಕೆ ಯೋಗ್ಯನಲ್ಲವೆಂದು ಎಣಿಸಿಕೊಂಡಿದ್ದೇನೆ; ಆದರೆ ನೀನು ಒಂದು ಮಾತು ಹೇಳು, ಆಗ ನನ್ನ ಆಳು ಗುಣಹೊಂದುವನು;
7:8b.LUK.007.008 ನಾನು ಸಹ ಅಧಿಕಾರದ ಕೆಳಗಿರುವವನು; ನನ್ನ ಅಧೀನದಲ್ಲಿಯೂ ಸೈನಿಕರಿದ್ದಾರೆ ಮತ್ತು ನಾನು ಒಬ್ಬನಿಗೆ--ಹೋಗು ಅಂದರೆ ಅವನು ಹೋಗುತ್ತಾನೆ; ಮತ್ತೊಬ್ಬನಿಗೆ--ಬಾ ಅಂದರೆ ಅವನು ಬರುತ್ತಾನೆ; ನನ್ನ ಸೇವಕನಿಗೆ--ಇದನ್ನು ಮಾಡು ಅಂದರೆ ಅವನು ಅದನ್ನು ಮಾಡುತ್ತಾನೆ ಎಂದು ಹೇಳಿ ಕಳುಹಿಸಿ
7:9b.LUK.007.009 ಯೇಸು ಇವುಗಳನ್ನು ಕೇಳಿದಾಗ ಅವನ ವಿಷಯದಲ್ಲಿ ಆಶ್ಚರ್ಯಪಟ್ಟು ತಿರುಗಿಕೊಂಡು ತನ್ನನ್ನು ಹಿಂಬಾಲಿಸು ತ್ತಿದ್ದವರಿಗೆ--ಇಂಥ ದೊಡ್ಡ ನಂಬಿಕೆಯನ್ನು ನಾನು ಇಸ್ರಾಯೇಲಿನಲ್ಲಿ ಸಹ ಕಾಣಲಿಲ್ಲವೆಂದು ನಿಮಗೆ ಹೇಳುತ್ತೇನೆ ಅಂದನು.
7:10b.LUK.007.010 ಕಳುಹಿಸಲ್ಪಟ್ಟವರು ಮನೆಗೆ ಹಿಂದಿರುಗಿದಾಗ ಅಸ್ವಸ್ಥನಾಗಿದ್ದ ಆ ಆಳು ಸ್ವಸ್ಥನಾಗಿರುವದನ್ನು ಕಂಡರು.
7:11b.LUK.007.011 ಇದಾದ ಮೇಲೆ ಮಾರಣೆಯ ದಿನ ಆತನು ನಾಯಿನೆಂಬ ಪಟ್ಟಣಕ್ಕೆ ಹೋದನು. ಆಗ ಆತನ ಶಿಷ್ಯರಲ್ಲಿ ಅನೇಕರೂ ಬಹು ಜನರೂ ಆತನ ಸಂಗಡ ಹೋದರು.
7:12b.LUK.007.012 ಆತನು ಪಟ್ಟಣ ದ್ವಾರದ ಸವಿಾಪಕ್ಕೆ ಬಂದಾಗ ಇಗೋ, ಸತ್ತುಹೋಗಿದ್ದ ಒಬ್ಬ ಮನುಷ್ಯನನ್ನು ಹೊತ್ತುಕೊಂಡು ಹೋಗುತ್ತಿದ್ದರು. ಅವನು ತನ್ನ ತಾಯಿಗೆ ಒಬ್ಬನೇ ಮಗನು; ಆಕೆಯು ವಿಧವೆಯಾಗಿ ದ್ದಳು. ಪಟ್ಟಣದ ಬಹಳ ಜನರು ಆಕೆಯೊಂದಿಗೆ ಇದ್ದರು.
7:13b.LUK.007.013 ಕರ್ತನು ಆಕೆಯನ್ನು ನೋಡಿ ಆಕೆಯ ಮೇಲೆ ಕನಿಕರಪಟ್ಟು ಆಕೆಗೆ--ಅಳಬೇಡ ಅಂದನು.
7:14b.LUK.007.014 ಆತನು ಬಂದು ಪೆಟ್ಟಿಗೆಯನ್ನು ಮುಟ್ಟಿದಾಗ ಅದನ್ನು ಹೊತ್ತುಕೊಂಡಿದ್ದವರು ಕದಲದೆ ನಿಂತರು; ಆಗ ಆತನು--ಯೌವನಸ್ಥನೇ, ಎದ್ದೇಳು ಎಂದು ನಾನು ನಿನಗೆ ಹೇಳುತ್ತೇನೆ ಅಂದನು.
7:15b.LUK.007.015 ಆಗ ಸತ್ತವನು ಕೂತುಕೊಂಡು ಮಾತನಾಡಲಾರಂಭಿಸಿದನು. ಆತನು ಅವನನ್ನು ಅವನ ತಾಯಿಗೆ ಒಪ್ಪಿಸಿದನು.
7:16b.LUK.007.016 ಆಗ ಅವರೆಲ್ಲರೂ ಭಯಹಿಡಿದವರಾಗಿ--ನಮ್ಮ ಮಧ್ಯ ದಲ್ಲಿ ಒಬ್ಬ ದೊಡ್ಡ ಪ್ರವಾದಿಯು ಎದ್ದಿದ್ದಾನೆ; --ದೇವರು ತನ್ನ ಜನರನ್ನು ದರ್ಶಿಸಿದ್ದಾನೆ ಎಂದು ದೇವ ರನ್ನು ಮಹಿಮೆಪಡಿಸುತ್ತಾ ಹೇಳಿದರು.
7:17b.LUK.007.017 ಆತನ ವಿಷಯವಾದ ಈ ಸುದ್ದಿಯು ಎಲ್ಲಾ ಯೂದಾಯಕ್ಕೂ ಸುತ್ತಲಿರುವ ಎಲ್ಲಾ ಪ್ರಾಂತ್ಯಕ್ಕೂ ಹೊರಟು ಹೋಯಿತು.
7:18b.LUK.007.018 ಯೋಹಾನನ ಶಿಷ್ಯರು ಈ ಎಲ್ಲಾ ವಿಷಯಗಳನ್ನು ಅವನಿಗೆ ತಿಳಿಯಪಡಿಸಿದರು.
7:19b.LUK.007.019 ಆಗ ಯೋಹಾನನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು ಯೇಸುವಿನ ಬಳಿಗೆ ಕಳುಹಿಸಿ--ಬರಬೇಕಾದವನು ನೀನೋ? ಇಲ್ಲವೆ ನಾವು ಇನ್ನೊಬ್ಬನಿಗಾಗಿ ಎದುರು ನೋಡಬೇಕೋ ಎಂದು ಕೇಳಿರಿ ಅಂದನು.
7:20b.LUK.007.020 ಅವರು ಆತನ ಬಳಿಗೆ ಬಂದಾಗ ಆತನಿಗೆ--ಬರಬೇಕಾದವನು ನೀನೋ? ಇಲ್ಲವೆ ನಾವು ಬೇರೊಬ್ಬನಿಗಾಗಿ ಎದುರು ನೋಡ ಬೇಕೋ? ಎಂದು ಕೇಳುವದಕ್ಕಾಗಿ ಬಾಪ್ತಿಸ್ಮ ಮಾಡಿಸುವ ಯೋಹಾನನು ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಿದರು.
7:21b.LUK.007.021 ಅದೇಗಳಿಗೆಯಲ್ಲಿ ರೋಗ ಗಳಿಂದಲೂ ವ್ಯಾಧಿಗಳಿಂದಲೂ ದುರಾತ್ಮಗಳಿಂದಲೂ ಪೀಡಿತರಾದ ಅನೇಕರನ್ನು ಆತನು ಗುಣಪಡಿಸಿದನು; ಕುರುಡರಾದ ಅನೇಕರಿಗೆ ದೃಷ್ಟಿಕೊಟ್ಟನು.
7:22b.LUK.007.022 ತರು ವಾಯ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಕುರು ಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠ ರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ, ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತದೆ ಎಂದು ನೀವು ಕಂಡು ಕೇಳಿದ ಇವು ಗಳನ್ನು
7:23b.LUK.007.023 ನನ್ನ ವಿಷಯದಲ್ಲಿ ಸಂದೇಹಪಡದವನೇ ಧನ್ಯನು ಅಂದನು.
7:24b.LUK.007.024 ಯೋಹಾನನ ದೂತರು ಹೊರಟು ಹೋದ ಮೇಲೆ ಆತನು ಯೋಹಾನನ ವಿಷಯವಾಗಿ ಮಾತನಾಡಲಾರಂಭಿಸಿ ಜನರಿಗೆ--ನೀವು ಯಾವದನ್ನು ನೋಡುವದಕ್ಕಾಗಿ ಅಡವಿಗೆ ಹೋದಿರಿ? ಗಾಳಿಯಿಂದ ಅಲ್ಲಾಡುವದಂಟನ್ನೋ?
7:25b.LUK.007.025 ಆದರೆ ನೀವು ಏನು ನೋಡುವದಕ್ಕಾಗಿ ಹೋದಿರಿ? ಇಗೋ, ನಯವಾದ ಉಡುಪನ್ನು ಧರಿಸಿದ್ದ ಮನುಷ್ಯನನ್ನೋ? ಶೋಭಾಯ ಮಾನವಾದ ಉಡುಪುಗಳನ್ನು ಧರಿಸಿಕೊಂಡು ಸುಖ ವಾಗಿ ಜೀವಿಸುವವರು ರಾಜರ ಓಲಗಗಳಲ್ಲಿ ಇರುತ್ತಾರೆ.
7:26b.LUK.007.026 ಆದರೆ ಏನು ನೋಡುವದಕ್ಕಾಗಿ ಹೋದಿರಿ? ಪ್ರವಾದಿಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ಎಂದು ನಾನು ನಿಮಗೆ ಹೇಳುತ್ತೇನೆ.
7:27b.LUK.007.027 ಇಗೋ, ನಿನ್ನ ದಾರಿಯನ್ನು ನಿನ್ನ ಮುಂದೆ ಸಿದ್ಧ ಮಾಡುವಂತೆ ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ ಎಂದು ಯಾವನ ವಿಷಯದಲ್ಲಿ ಬರೆದಿತ್ತೋ ಅವನೇ ಇವನು.
7:28b.LUK.007.028 ಯಾಕಂದರೆ-- ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಬಾಪ್ತಿಸ್ಮ ಮಾಡಿಸುವ ಯೋಹಾನನಿಗಿಂತ ದೊಡ್ಡ ಪ್ರವಾದಿಯು ಯಾವನೂ ಇಲ್ಲ; ಆದರೆ ದೇವರ ರಾಜ್ಯದಲ್ಲಿ ಅತ್ಯಲ್ಪನಾದವನು ಅವನಿಗಿಂತಲೂ ದೊಡ್ಡವನಾಗಿದ್ದಾನೆ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
7:29b.LUK.007.029 ಅವನಿಂದ ಉಪ ದೇಶ ಕೇಳಿದ ಎಲ್ಲಾ ಜನರೂ ಸುಂಕದವರೂ ಯೋಹಾನನ ಬಾಪ್ತಿಸ್ಮ ಮಾಡಿಸಿಕೊಂಡವರಾಗಿ ದೇವರು ನೀತಿವಂತನೆಂದು ಒಪ್ಪಿಕೊಂಡರು.
7:30b.LUK.007.030 ಆದರೆ ಫರಿಸಾಯರೂ ನ್ಯಾಯಶಾಸ್ತ್ರಿಗಳೂ ಅವನಿಂದ ಬಾಪ್ತಿಸ್ಮಮಾಡಿಸಿಕೊಳ್ಳದೆ ಹೋದದರಿಂದ ತಮ್ಮ ವಿಷಯದಲ್ಲಿರುವ ದೇವರ ಸಂಕಲ್ಪವನ್ನು ತಿರಸ್ಕಾರ ಮಾಡಿದರು.
7:31b.LUK.007.031 ಕರ್ತನು--ಈ ಸಂತತಿಯವರನ್ನು ನಾನು ಯಾವದಕ್ಕೆ ಹೋಲಿಸಲಿ? ಮತ್ತು ಅವರು ಯಾವದಕ್ಕೆ ಹೋಲಿಕೆಯಾಗಿದ್ದಾರೆ?
7:32b.LUK.007.032 ಅವರು ಸಂತೆ ಯಲ್ಲಿ ಕೂತುಕೊಂಡು ಒಬ್ಬರನ್ನೊಬ್ಬರು ಕರೆ ಯುತ್ತಾ--ನಾವು ನಿಮಗಾಗಿ ಕೊಳಲೂದಿದೆವು, ನೀವು ಕುಣಿಯಲಿಲ್ಲ; ನಾವು ನಿಮಗಾಗಿ ಶೋಕಿಸಿದೆವು, ನೀವು ಅಳಲಿಲ್ಲ ಎಂದು ಹೇಳುವ ಮಕ್ಕಳಿಗೆ ಹೋಲಿಕೆ ಯಾಗಿದ್ದಾರೆ.
7:33b.LUK.007.033 ಬಾಪ್ತಿಸ್ಮ ಮಾಡಿಸುವ ಯೋಹಾನನು ರೊಟ್ಟಿಯನ್ನು ತಿನ್ನದೆಯೂ ಇಲ್ಲವೆ ದ್ರಾಕ್ಷಾರಸವನ್ನು ಕುಡಿಯದೆಯೂ ಬಂದನು; ಅದಕ್ಕೆ ನೀವು--ಅವನಲ್ಲಿ ದೆವ್ವವಿದೆ ಅನ್ನುತ್ತೀರಿ.
7:34b.LUK.007.034 ಮನುಷ್ಯಕುಮಾರನು ತಿನ್ನು ವವನಾಗಿಯೂ ಕುಡಿಯುವವನಾಗಿಯೂ ಬಂದನು; ಆದರೆ ನೀವು--ಇಗೋ, ಹೊಟ್ಟೇಬಾಕನು, ಕುಡು ಕನು, ಸುಂಕದವರ ಮತ್ತು ಪಾಪಿಗಳ ಸ್ನೇಹಿತನು ಅನ್ನುತ್ತೀರಿ.
7:35b.LUK.007.035 ಆದರೆ ಜ್ಞಾನವು ತನ್ನ ಎಲ್ಲಾ ಮಕ್ಕಳಿಂದ ನೀತಿ ನಿರ್ಣಯಪಡೆಯುವದು ಅಂದನು.
7:36b.LUK.007.036 ಆಗ ಫರಿಸಾಯರಲ್ಲಿ ಒಬ್ಬನು ತನ್ನೊಂದಿಗೆ ಊಟ ಮಾಡ ಬೇಕೆಂದು ಅಪೇಕ್ಷಿಸಿದನು;ಆಗ ಆತನು ಆ ಫರಿಸಾ ಯನ ಮನೆಯೊಳಕ್ಕೆ ಹೋಗಿ ಊಟಕ್ಕೆ ಕೂತು ಕೊಂಡನು.
7:37b.LUK.007.037 ಆಗ ಇಗೋ, ಆ ಪಟ್ಟಣದಲ್ಲಿದ್ದ ಫರಿಸಾಯನ ಮನೆಯಲ್ಲಿ ಯೇಸು ಊಟಕ್ಕೆ ಕೂತು ಕೊಂಡಿದ್ದಾನೆಂದು ಒಬ್ಬ ಪಾಪಿಯಾದ ಸ್ತ್ರೀಯು ತಿಳಿದು ಸುಗಂಧತೈಲದ ಭರಣಿಯನ್ನು ತಂದು
7:38b.LUK.007.038 ಆತನ ಹಿಂದೆ ಪಾದಗಳ ಬಳಿಯಲ್ಲಿ ನಿಂತು ಅಳುತ್ತಾ ಆತನ ಪಾದ ಗಳನ್ನು ಕಣ್ಣೀರಿನಿಂದ ತೊಳೆಯಲಾರಂಭಿಸಿ ಅವುಗಳನ್ನು ತನ್ನ ತಲೇಕೂದಲಿನಿಂದ ಒರಸಿ ಆತನ ಪಾದಗಳಿಗೆ ಮುದ್ದಿಟ್ಟು ಆ ತೈಲವನ್ನು ಹಚ್ಚಿದಳು.
7:39b.LUK.007.039 ಆಗ ಆತನನ್ನು ಕರೆದ ಫರಿಸಾಯನು ಅದನ್ನು ನೋಡಿ ತನ್ನೊಳಗೆ--ಈ ಮನುಷ್ಯನು ಒಬ್ಬ ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟುತ್ತಿದ್ದವಳು ಯಾರು ಎಂದೂ ಎಂಥತರವಾದ ಹೆಂಗಸು ಎಂದೂ ತಿಳಿದುಕೊಳ್ಳುತ್ತಿದ್ದನು; ಯಾಕಂದರೆ ಅವಳು ಒಬ್ಬ ಪಾಪಿ ಎಂದು ತನ್ನೊಳಗೆ ಅಂದು ಕೊಂಡನು.
7:40b.LUK.007.040 ಆಗ ಯೇಸು ಅವನಿಗೆ--ಸೀಮೋ ನನೇ, ನಾನು ನಿನಗೆ ಹೇಳುವದಕ್ಕೆ ಒಂದು ಮಾತು ಇದೆ ಅನ್ನಲು ಅವನು ಆತನಿಗೆ--ಗುರುವೇ, ಹೇಳು ಅಂದಾಗ, ಆತನು--
7:41b.LUK.007.041 ಸಾಲಕೊಡುವ ಒಬ್ಬನಿಗೆ ಇಬ್ಬರು ಸಾಲಗಾರರಿದ್ದರು; ಒಬ್ಬನು ಐದುನೂರು ನಾಣ್ಯಗಳನ್ನೂ ಮತ್ತೊಬ್ಬನು ಐವತ್ತು ನಾಣ್ಯಗಳನ್ನೂ ಕೊಡಬೇಕಾಗಿತ್ತು.
7:42b.LUK.007.042 ಅವರಿಗೆ ಕೊಡುವದಕ್ಕೆ ಏನೂ ಇಲ್ಲದ್ದರಿಂದ ಅವನು ಅವರಿಬ್ಬರನ್ನೂ ಯಥಾರ್ಥ ವಾಗಿ ಕ್ಷಮಿಸಿಬಿಟ್ಟನು. ಆದದರಿಂದ ಅವರಲ್ಲಿ ಯಾರು ಬಹಳವಾಗಿ ಅವನನ್ನು ಪ್ರೀತಿಸುವರು ಎಂಬದನ್ನು ನನಗೆ ಹೇಳು ಅಂದನು.
7:43b.LUK.007.043 ಅದಕ್ಕೆ ಸೀಮೋನನು ಪ್ರತ್ಯುತ್ತರವಾಗಿ--ಯಾರಿಗೆ ಅವನು ಬಹಳವಾಗಿ ಕ್ಷಮಿಸಿದನೋ ಅವನೇ ಎಂದು ನಾನು ನೆನಸುತ್ತೇನೆ ಅಂದನು. ಆಗ ಆತನು ಅವನಿಗೆ--ನೀನು ಸರಿಯಾಗಿ ತೀರ್ಪು ಮಾಡಿದಿ ಅಂದನು.
7:44b.LUK.007.044 ತರುವಾಯ ಆತನು ಆ ಸ್ತ್ರೀಯ ಕಡೆಗೆ ತಿರುಗಿಕೊಂಡು ಸೀಮೋನ ನಿಗೆ--ಈ ಸ್ತ್ರೀಯನ್ನು ನೋಡಿದೆಯಾ? ನಾನು ನಿನ್ನ ಮನೆಯೊಳಗೆ ಪ್ರವೇಶಿಸಿದಾಗ ನನ್ನ ಪಾದಗಳಿಗೆ ನೀನು ನೀರು ಕೊಡಲಿಲ್ಲ; ಇವಳಾದರೋ ನನ್ನ ಪಾದ ಗಳನು ಕಣ್ಣೀರಿನಿಂದ ತೊಳೆದು ತನ್ನ ತಲೇಕೂದಲಿನಿಂದ ಅವುಗಳನ್ನು ಒರೆ
7:45b.LUK.007.045 ನೀನು ನನಗೆ ಮುದ್ದು ಕೊಡಲಿಲ್ಲ; ಆದರೆ ನಾನು ಒಳಗೆ ಬಂದಾಗಿನಿಂದ ಈ ಸ್ತ್ರೀಯು ನನ್ನ ಪಾದಗಳಿಗೆ ಮುದ್ದಿಡುವದನ್ನು ಬಿಡಲಿಲ್ಲ.
7:46b.LUK.007.046 ನನ್ನ ತಲೆಗೆ ನೀನು ಎಣ್ಣೆ ಹಚ್ಚಲಿಲ್ಲ; ಆದರೆ ಈ ಸ್ತ್ರೀಯು ನನ್ನ ಪಾದಗಳಿಗೆ ತೈಲವನ್ನು ಹಚ್ಚಿದ್ದಾಳೆ.
7:47b.LUK.007.047 ಆದದರಿಂದ ನಾನು ಹೇಳುವದೇ ನಂದರೆ--ಬಹಳವಾಗಿರುವ ಅವಳ ಪಾಪಗಳು ಕ್ಷಮಿಸ ಲ್ಪಟ್ಟಿವೆ. ಯಾಕಂದರೆ ಅವಳು ಬಹಳವಾಗಿ ಪ್ರೀತಿಸಿ ದಳು; ಆದರೆ ಯಾವನಿಗೆ ಸ್ವಲ್ಪವಾಗಿ ಕ್ಷಮಿಸಲ್ಪಡು ವದೋ ಅವನು ಸ್ವಲ್ಪವಾಗಿ ಪ್ರೀತಿಸುವನು.
7:48b.LUK.007.048 ಆತನು ಆಕೆಗೆ--ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅಂದನು.
7:49b.LUK.007.049 ಆತನ ಸಂಗಡ ಊಟಕ್ಕೆ ಕೂತವರು ತಮ್ಮೊಳಗೆ--ಪಾಪಗಳನ್ನು ಸಹ ಕ್ಷಮಿಸುವದಕ್ಕೆ ಈತನು ಯಾರು ಎಂದು ತಮ್ಮಲ್ಲಿ ಅಂದುಕೊಳ್ಳಲಾರಂಭಿಸಿದರು.ಆಗ ಆತನು ಆ ಸ್ತ್ರೀಗೆ--ನಿನ್ನ ನಂಬಿಕೆಯು ನಿನ್ನನ್ನು ರಕ್ಷಿಸಿಯದೆ, ಸಮಾಧಾನದಿಂದ ಹೋಗು ಅಂದನು.
7:50b.LUK.007.050 ಆಗ ಆತನು ಆ ಸ್ತ್ರೀಗೆ--ನಿನ್ನ ನಂಬಿಕೆಯು ನಿನ್ನನ್ನು ರಕ್ಷಿಸಿಯದೆ, ಸಮಾಧಾನದಿಂದ ಹೋಗು ಅಂದನು.
8
8:1b.LUK.008.001 ಇದಾದ ಮೇಲೆ ಆತನು ಪ್ರತಿಯೊಂದು ಪಟ್ಟಣಕ್ಕೂ ಹಳ್ಳಿಗೂ ಎಲ್ಲಾ ಕಡೆಯಲ್ಲಿ ಹೋಗಿ ದೇವರರಾಜ್ಯದ ಸಂತೋಷಸಮಾಚಾರವನ್ನು ಸಾರಿ ತಿಳಿಸುತ್ತಿದ್ದನು. ಹನ್ನೆರಡು ಮಂದಿ (ಶಿಷ್ಯರು) ಆತನೊಂದಿಗೆ ಇದ್ದರು.
8:2b.LUK.008.002 ಇದಲ್ಲದೆ ದುರಾತ್ಮಗಳಿಂ ದಲೂ ರೋಗಗಳಿಂದಲೂ ಸ್ವಸ್ಥಮಾಡಲ್ಪಟ್ಟ ಕೆಲವು ಸ್ತ್ರೀಯರು ಮತ್ತು ಏಳು ದೆವ್ವಗಳು ಬಿಟ್ಟು ಹೋಗಿದ್ದ ಮಗ್ದಲಿನ ಎಂದು ಕರೆಯಲ್ಪಟ್ಟ ಮರಿಯಳೂ
8:3b.LUK.008.003 ಹೆರೋದನ ಮನೆವಾರ್ತೆಯವನಾದ ಕೂಜನ ಹೆಂಡತಿ ಯೋಹಾನಳೂ ಸುಸನ್ನಳೂ ಮತ್ತು ಬೇರೆ ಅನೇಕರು ತಮ್ಮ ಸೊತ್ತಿನಿಂದ ಆತನನ್ನು ಉಪಚರಿ ಸಿದವರು ಆತನೊಂದಿಗೆ ಇದ್ದರು.
8:4b.LUK.008.004 ಆಗ ಪ್ರತಿಯೊಂದು ಪಟ್ಟಣದಿಂದ ಬಹು ಜನರು ಆತನ ಬಳಿಗೆ ಒಟ್ಟಾಗಿ ಸೇರಿ ಬರಲು ಆತನು ಒಂದು ಸಾಮ್ಯದಿಂದ--
8:5b.LUK.008.005 ಬಿತ್ತುವವನು ಬೀಜವನ್ನು ಬಿತ್ತುವದಕ್ಕಾಗಿ ಹೊರಟು ಹೋದನು. ಅವನು ಬಿತ್ತಿದಾಗ ಕೆಲವು ದಾರಿಯ ಮಗ್ಗುಲಲ್ಲಿ ಬಿದ್ದು ತುಳಿಯಲ್ಪಟ್ಟವು; ಆಕಾಶದ ಪಕ್ಷಿಗಳು ಅವುಗಳನ್ನು ನುಂಗಿಬಿಟ್ಟವು.
8:6b.LUK.008.006 ಇದಲ್ಲದೆ ಕೆಲವು ಬಂಡೆಯ ಮೇಲೆ ಬಿದ್ದವು; ಮೊಳೆತ ಕೂಡಲೆ ತ್ಯಾವ ಇಲ್ಲದಿರುವ ಕಾರಣ ಒಣಗಿಹೋದವು.
8:7b.LUK.008.007 ಕೆಲವು ಮುಳ್ಳುಗಳ ಮಧ್ಯದಲ್ಲಿ ಬಿದ್ದವು; ಆಗ ಮುಳ್ಳುಗಳು ಅವುಗಳೊಂದಿಗೆ ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.
8:8b.LUK.008.008 ಕೆಲವು ಒಳ್ಳೇ ನೆಲದ ಮೇಲೆ ಬಿದ್ದವು; ಆಗ ಅವು ಬೆಳೆದು ನೂರರಷ್ಟು ಫಲಕೊಟ್ಟವು. ಇವುಗಳನ್ನು ಆತನು ಹೇಳಿ--ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಎಂದು ಕೂಗಿ ಹೇಳಿದನು.
8:9b.LUK.008.009 ಆತನ ಶಿಷ್ಯರು ಆತ ನನ್ನು--ಈ ಸಾಮ್ಯವು ಏನಾಗಿರಬಹುದು ಎಂದು ಕೇಳಿದರು.
8:10b.LUK.008.010 ಅದಕ್ಕೆ ಆತನು--ದೇವರರಾಜ್ಯದ ಮರ್ಮಗಳನ್ನು ತಿಳುಕೊಳ್ಳುವದಕ್ಕೆ ನಿಮಗೆ ಕೊಡ ಲ್ಪಟ್ಟಿದೆ. ಆದರೆ ಉಳಿದವರಿಗೆ ಅವರು ನೋಡಿದರೂ ಕಾಣದಂತೆ ಮತ್ತು ಕೇಳಿದರೂ ಗ್ರಹಿಸದಂತೆ ಸಾಮ್ಯ ಗಳಲ್ಲಿ ಕೊಡಲ್ಪಟ್ಟಿದೆ.
8:11b.LUK.008.011 ಆ ಸಾಮ್ಯವು ಇದೇ; ಬೀಜವು ದೇವರ ವಾಕ್ಯವೇ.
8:12b.LUK.008.012 ವಾಕ್ಯವನ್ನು ಕೇಳಿದವರು ನಂಬಿ ರಕ್ಷಣೆಹೊಂದಿಕೊಳ್ಳದಂತೆ ಸೈತಾನನು ಬಂದು ಅವರ ಹೃದಯದೊಳಗಿಂದ ಆ ವಾಕ್ಯವನ್ನು ತೆಗೆದು ಬಿಡುವನು. ಇವರೇ ಆ ದಾರಿಯ ಮಗ್ಗುಲಾಗಿ ರುವವರು.
8:13b.LUK.008.013 ಬಂಡೆಯ ನೆಲದವರು ಯಾರಂದರೆ, ಅವರು ವಾಕ್ಯವನ್ನು ಕೇಳಿದಾಗ ಸಂತೋಷದಿಂದ ಅಂಗೀಕರಿಸುವರು; ಇವರು ಬೇರಿಲ್ಲದಿರುವದರಿಂದ ಸ್ವಲ್ಪಕಾಲ ನಂಬಿ ಶೋಧನೆ ಬಂದಾಗ ಬಿದ್ದು ಹೋಗುವರು.
8:14b.LUK.008.014 ಮುಳ್ಳುಗಳ ಮಧ್ಯದಲ್ಲಿ ಬಿದ್ದ ಬೀಜದವರು ಯಾರಂದರೆ ಅವರು ಕೇಳಿದ ಮೇಲೆ ಮುಂದರಿದು ಈ ಜೀವನದ ಚಿಂತೆಗಳಿಂದಲೂ ಐಶ್ವರ್ಯಗಳಿಂದಲೂ ಭೋಗಗಳಿಂದಲೂ ಅಡಗಿಸ ಲ್ಪಟ್ಟು ಪರಿಪೂರ್ಣವಾಗಿ ಫಲಿಸದವರು.
8:15b.LUK.008.015 ಆದರೆ ಒಳ್ಳೇ ಭೂಮಿಯವರು ಯಾರಂದರೆ ಯಥಾರ್ಥವಾದ ಒಳ್ಳೇ ಹೃದಯದಿಂದ ವಾಕ್ಯವನ್ನು ಕೇಳಿ ಅದನು ಕೈಕೊಂಡು ತಾಳ್ಮೆಯಿಂದ ಫಲಿಸುವವರೇ.
8:16b.LUK.008.016 ದೀಪವನ್ನು ಹಚ್ಚಿ ಯಾರೂ ಅದನ್ನು ಪಾತ್ರೆ ಯಿಂದ ಮುಚ್ಚುವದಿಲ್ಲ; ಇಲ್ಲವೆ ಮಂಚದ ಕೆಳಗೆ ಇಡುವದಿಲ್ಲ; ಆದರೆ ಒಳಗೆ ಪ್ರವೇಶಿಸುವವರು ಬೆಳಕನ್ನು ನೋಡುವಂತೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.
8:17b.LUK.008.017 ಪ್ರಕಟವಾಗದೆ ಮರೆಯಾಗಿ ರುವಂತದ್ದು ಒಂದೂ ಇರುವದಿಲ್ಲ ತಿಳಿಯಲ್ಪಡದೆಯೂ ಬೈಲಿಗೆ ಬಾರದೆಯೂ ಇರುವ ರಹಸ್ಯವು ಯಾವದೂ ಇಲ್ಲ.
8:18b.LUK.008.018 ಆದದರಿಂದ ನೀವು ಕೇಳುವವುಗಳ ವಿಷಯದಲ್ಲಿ ಎಚ್ಚರಿಕೆ ತಂದುಕೊಳ್ಳಿರಿ. ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಇಲ್ಲದವನಿಗೆ ತನಗೆ ಉಂಟೆಂದು ನೆನಸುವದನ್ನೂ ಅವನಿಂದ ತೆಗೆಯಲ್ಪ ಡುವದು ಎಂದು ಹೇಳಿದನು.
8:19b.LUK.008.019 ತರುವಾಯ ಆತನ ತಾಯಿಯೂ ಆತನ ಸಹೋದರರೂ ಆತನಿದ್ದಲ್ಲಿಗೆ ಬಂದು ಜನರ ಗುಂಪಿನ ನಿಮಿತ್ತ ಆತನ ಬಳಿಗೆ ಹೋಗಲಾರದೆ ಇದ್ದರು.
8:20b.LUK.008.020 ಆಗ ಒಬ್ಬನು ಆತನಿಗೆ--ನಿನ್ನ ತಾಯಿಯೂ ನಿನ್ನ ಸಹೋದರರೂ ನಿನ್ನನ್ನು ನೋಡಬೇಕೆಂದು ಅಪೇಕ್ಷಿಸಿ ಹೊರಗೆ ನಿಂತಿದ್ದಾರೆ ಅಂದನು.
8:21b.LUK.008.021 ಆದರೆ ಆತನು ಪ್ರತ್ಯುತ್ತರವಾಗಿ ಅವರಿಗೆ--ದೇವರ ವಾಕ್ಯವನ್ನು ಕೇಳಿ ಅದರಂತೆ ಮಾಡುವ ಇವರೇ ನನ್ನ ತಾಯಿಯೂ ನನ್ನ ಸಹೋದರರೂ ಆಗಿದ್ದಾರೆ ಎಂದು ಹೇಳಿದನು.
8:22b.LUK.008.022 ಇದಾದ ಮೇಲೆ ಒಂದಾನೊಂದು ದಿವಸ ಆತನು ತನ್ನ ಶಿಷ್ಯರೊಂದಿಗೆ ದೋಣಿಯನ್ನು ಹತ್ತಿ ಅವರಿಗೆ--ನಾವು ಕೆರೆಯ ಆಚೇದಡಕ್ಕೆ ಹೋಗೋಣ ಎಂದು ಹೇಳಿದಾಗ ಅವರು ಹೊರಟರು.
8:23b.LUK.008.023 ಆದರೆ ಅವರು ಪ್ರಯಾಣಮಾಡುತ್ತಿದ್ದಾಗ ಆತನು ನಿದ್ರಿ ಸಿದನು; ಆಗ ಬಿರುಗಾಳಿಯು ಕೆರೆಯ ಮೇಲೆ ಬೀಸಲು ದೋಣಿಯೊಳಗೆ ನೀರು ತುಂಬಿದ್ದರಿಂದ ಅವರು ಪ್ರಾಣಾಪಾಯಕ್ಕೊಳಗಾದರು.
8:24b.LUK.008.024 ಆಗ ಅವರು ಆತನ ಬಳಿಗೆ ಬಂದು ಆತನನ್ನು ಎಬ್ಬಿಸಿ--ಬೋಧ ಕನೇ, ಬೋಧಕನೇ, ನಾವು ನಾಶವಾಗುತ್ತೇವೆ ಅಂದರು. ಆಗ ಆತನು ಎದ್ದು ಗಾಳಿಯನ್ನೂ ಏರಿ ಬರುತ್ತಿದ್ದ ನೀರನ್ನೂ ಗದರಿಸಿದನು; ಆಗ ಅವು ನಿಂತು ಹೋಗಿ ಅಲ್ಲಿ ಶಾಂತತೆ ಉಂಟಾಯಿತು.
8:25b.LUK.008.025 ಆಗ ಆತನು ಅವರಿಗೆ--ನಿಮ್ಮ ನಂಬಿಕೆ ಎಲ್ಲಿ ಅಂದನು. ಆಗ ಅವರು ಹೆದರಿದವರಾಗಿ ಆಶ್ಚರ್ಯದಿಂದ ಒಬ್ಬರಿಗೊಬ್ಬರು-- ಈತನು ಎಂಥಾ ಮನುಷ್ಯನು? ಯಾಕಂದರೆ ಈತನು ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ. ಅವುಗಳು ಆತನಿಗೆ ವಿಧೇಯವಾಗು ತ್ತವಲ್ಲಾ ಎಂದು ಮಾತನಾಡಿಕೊಂಡರು.
8:26b.LUK.008.026 ಅವರು ಗಲಿಲಾಯಕ್ಕೆ ಎದುರಾಗಿದ್ದ ಗದರೇನರ ಸೀಮೆಗೆ ತಲುಪಿದರು.
8:27b.LUK.008.027 ಆತನು ದಡಕ್ಕೆ ಸೇರಿದಾಗ ಬಹು ಕಾಲದಿಂದ ದೆವ್ವಗಳು ಹಿಡಿದು ಬಟ್ಟೆ ಧರಿಸಿಕೊಳ್ಳದೆಯೂ ಯಾವ ಮನೆಯಲ್ಲಿ ವಾಸಿ ಸದೆಯೂ ಸಮಾಧಿಗಳಲ್ಲಿ ಇದ್ದ ಒಬ್ಬ ಮನುಷ್ಯನು ಪಟ್ಟಣದೊಳಗಿಂದ ಹೊರಗೆ ಬಂದು ಅಲ್ಲಿ ಆತನನ್ನು ಸಂಧಿಸಿದನು.
8:28b.LUK.008.028 ಅವನು ಯೇಸುವನ್ನು ನೋಡಿದಾಗ ಆತನ ಮುಂದೆ ಬಿದ್ದು--ಯೇಸುವೇ, ಮಹೋನ್ನತ ನಾದ ದೇವರಕುಮಾರನೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಸಂಕಟಪಡಿಸಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಎಂದು ಗಟ್ಟಿಯಾದ ಸ್ವರದಿಂದ ಕೂಗಿ ಹೇಳಿದನು.
8:29b.LUK.008.029 (ಯಾಕಂದರೆ ಆ ಅಶುದ್ಧಾತ್ಮವು ಅವನಿಂದ ಹೊರಗೆ ಬರಬೇಕೆಂದು ಆತನು ಅಪ್ಪಣೆ ಕೊಟ್ಟಿದ್ದನು. ಅದು ಬಹಳ ಸಾರಿ ಅವನನ್ನು ಹಿಡಿಯುತ್ತಿ ದ್ದದರಿಂದ ಅವನು ಸರಪಣಿಗಳಿಂದಲೂ ಬೇಡಿಗಳಿಂ ದಲೂ ಕಟ್ಟಲ್ಪಡುತ್ತಿದ್ದರೂ ಅವನು ಆ ಬಂಧನಗಳನ್ನು ಮುರಿದುಬಿಡುತ್ತಿದ್ದನು ಮತ್ತು ದೆವ್ವವು ಅವನನ್ನು ಅ
8:30b.LUK.008.030 ಯೇಸು ಅವನಿಗೆ--ನಿನ್ನ ಹೆಸರು ಏನು ಎಂದು ಕೇಳಿದನು. ಅದಕ್ಕವನು--ಲೀಜೆನ್ (ದಂಡು) ಅಂದನು. ಯಾಕಂ ದರೆ ಬಹಳ ದೆವ್ವಗಳು ಅವನಲ್ಲಿ ಸೇರಿಕೊಂಡಿದ್ದವು.
8:31b.LUK.008.031 ಅವು ತಮ್ಮನ್ನು ಹೊರಗೆ ಅಗಾಧಕ್ಕೆ ಹೋಗುವಂತೆ ಅಪ್ಪಣೆ ಕೊಡಬಾರದೆಂದು ಆತನನ್ನು ಬೇಡಿಕೊಂಡವು.
8:32b.LUK.008.032 ಆಗ ಅಲ್ಲಿ ಬೆಟ್ಟದ ಮೇಲೆ ಬಹಳ ಹಂದಿಗಳ ಹಿಂಡು ಮೇಯುತ್ತಿದ್ದದರಿಂದ ಅವುಗಳೊಳಗೆ ತಾವು ಸೇರಿಕೊಳ್ಳಲು ಅಪ್ಪಣೆ ಕೊಡಬೇಕೆಂದು ಆತನನ್ನು ಬೇಡಿಕೊಂಡವು. ಆತನು ಅವುಗಳಿಗೆ ಅಪ್ಪಣೆಕೊಟ್ಟನು.
8:33b.LUK.008.033 ಆಗ ಆ ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು ಹಂದಿಗಳೊಳಗೆ ಸೇರಿದವು. ಆ ಗುಂಪು ಉಗ್ರತೆಯಿಂದ ಓಡಿ ಕಡಿದಾದ ಸ್ಥಳದಿಂದ ಕೆರೆಯೊಳಗೆ ಬಿದ್ದು ಉಸಿರುಗಟ್ಟಿ ಸತ್ತವು.
8:34b.LUK.008.034 ಅವುಗಳನ್ನು ಮೇಯಿಸು ತ್ತಿದ್ದವರು ಸಂಭವಿಸಿದ್ದನ್ನು ನೋಡಿ ಓಡಿಹೋಗಿ ಪಟ್ಟಣದಲ್ಲಿಯೂ ಸೀಮೆಯಲ್ಲಿಯೂ ಅದನ್ನು ತಿಳಿಯ ಪಡಿಸಿದರು.
8:35b.LUK.008.035 ಆಗ ಜನರು ನಡೆದ ಸಂಗತಿ ಏನೆಂದು ನೋಡುವದಕ್ಕಾಗಿ ಹೊರಟು ಹೋಗಿ ಯೇಸುವಿನ ಬಳಿಗೆ ಬಂದು ದೆವ್ವಗಳು ಬಿಟ್ಟು ಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿ ಯುಳ್ಳವನಾಗಿ ಯೇಸುವಿನ ಪಾದಗಳ ಬಳಿಯಲ್ಲಿ ಕೂತಿರುವದನ್ನು ಕಂಡು ಭಯಪಟ್ಟರು.
8:36b.LUK.008.036 ಅದನ್ನು ನೋಡಿದವರು ಸಹ ಯಾವ ರೀತಿಯಲ್ಲಿ ದೆವ್ವಗಳಿಂದ ಹಿಡಿದಿದ್ದವನು ಸ್ವಸ್ಥಮಾಡಲ್ಪಟ್ಟನೆಂದು ಅವರಿಗೆ ತಿಳಿಯ ಪಡಿಸಿದರು.
8:37b.LUK.008.037 ಆಗ ಗದರೇನನ ಸೀಮೆಯ ಸುತ್ತು ಮುತ್ತಲಿನ ಜನಸಮೂಹವೆಲ್ಲವು ಬಹಳ ಭಯ ಹಿಡಿದವರಾದದರಿಂದ ಆತನು ತಮ್ಮ ಬಳಿಯಿಂದ ಹೊರಟುಹೋಗಬೇಕೆಂದು ಆತನನ್ನು ಬೇಡಿ ಕೊಂಡರು; ಆತನು ದೋಣಿಯನ್ನು ಹತ್ತಿಹಿಂದಿರುಗಿ ದನು.
8:38b.LUK.008.038 ಆಗ ದೆವ್ವಗಳು ಬಿಟ್ಟು ಹೋಗಿದ್ದ ಆ ಮನುಷ್ಯನು ತಾನು ಆತನ ಜೊತೆಯಲ್ಲಿ ಇರುವೆನೆಂದು ಆತನನ್ನು ಬೇಡಿಕೊಂಡನು. ಆದರೆ ಯೇಸು ಅವನನ್ನು ಕಳುಹಿಸಿಬಿಟ್ಟು ಅವನಿಗೆ--
8:39b.LUK.008.039 ನೀನು ನಿನ್ನ ಸ್ವಂತ ಮನೆಗೆ ಹಿಂತಿರುಗಿ ಹೋಗಿ ದೇವರು ನಿನಗೆ ಎಂಥಾ ಮಹತ್ವವಾದವುಗಳನ್ನು ಮಾಡಿದ್ದಾನೆಂಬದನ್ನು ತೋರಿಸು ಅಂದನು. ಅವನು ತನ್ನ ಮಾರ್ಗವಾಗಿ ಹೊರಟು ಯೇಸು ತನಗೆ ಎಂಥಾ ದೊಡ್ಡ ಕಾರ್ಯಗಳನ್ನು ಮಾಡಿದ್ದಾನೆಂದು ಪಟ್ಟಣದಲ್ಲೆಲಾ ಪ್ರಚಾರಮಾಡಿದನು.
8:40b.LUK.008.040 ಇದಾದ ಮೇಲೆ ಯೇಸು ಹಿಂತಿರುಗಿದಾಗ ಜನರು ಆತನನ್ನು ಸಂತೋಷದಿಂದ ಅಂಗೀಕರಿಸಿದರು; ಯಾಕಂದರೆ ಅವರೆಲ್ಲರು ಆತನಿಗಾಗಿ ಕಾಯುತ್ತಿದ್ದರು.
8:41b.LUK.008.041 ಆಗ ಇಗೋ, ಸಭಾಮಂದಿರದ ಅಧಿಕಾರಿಯಾಗಿದ್ದ ಯಾಯಾರನೆಂಬ ಹೆಸರಿನ ಮನುಷ್ಯನು ಬಂದು ಯೇಸುವಿನ ಪಾದಗಳ ಮುಂದೆ ಬಿದ್ದು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು.
8:42b.LUK.008.042 ಯಾಕಂದರೆ ಅವನಿ ಗಿದ್ದ ಹೆಚ್ಚು ಕಡಿಮೆ ಹನ್ನೆರಡು ವರುಷದವಳಾದ ಒಬ್ಬಳೇ ಮಗಳು ಸಾಯುವಹಾಗಿದ್ದಳು. ಆದರೆ ಆತನು ಹೋಗುತ್ತಿದ್ದಾಗ ಜನರು ಆತನನ್ನು ನೂಕಾ ಡುತ್ತಿದ್ದರು.
8:43b.LUK.008.043 ಆಗ ಹನ್ನೆರಡು ವರುಷಗಳಿಂದಲೂ ರಕ್ತಸ್ರಾವ ರೋಗವಿದ್ದು ತನ್ನ ಜೀವನಕ್ಕೆ ಇದ್ದದ್ದನ್ನು ವೈದ್ಯರಿಗೆ ವೆಚ್ಚಮಾಡಿದ್ದಾಗ್ಯೂ ಯಾರಿಂದಲೂ ವಾಸಿಯಾಗದೆ ಇದ್ದ ಒಬ್ಬ ಸ್ತ್ರೀಯು
8:44b.LUK.008.044 ಆತನ ಹಿಂದೆ ಬಂದು ಆತನ ಉಡುಪಿನ ಅಂಚನ್ನು ಮುಟ್ಟಿದಳು; ಕೂಡಲೆ ಆಕೆಯ ರಕ್ತಸ್ರಾವವು ನಿಂತುಹೋಯಿತು.
8:45b.LUK.008.045 ಆಗ ಯೇಸು--ನನ್ನನ್ನು ಮುಟ್ಟಿದವರು ಯಾರು ಅಂದನು. ಎಲ್ಲರೂ ಅಲ್ಲಗಳೆದಾಗ ಪೇತ್ರನು ಮತ್ತು ಅವನ ಕೂಡ ಇದ್ದವರು ಆತನಿಗೆ--ಬೋಧಕನೇ, ಸಮೂಹವು ನಿನ್ನನ್ನು ನೂಕುತ್ತಾ ನಿನ್ನ ಮೇಲೆ ಬೀಳುತ್ತಿರಲಾಗಿ ನೀನು--ನನ್ನನ್ನು ಯಾರು ಮುಟ್ಟಿದರು ಎಂದು ಕೇಳುತ್ತೀಯಲ್ಲಾ ಅಂದರು.
8:46b.LUK.008.046 ಆದರೆ ಯೇಸು--ಯಾರೋ ಒಬ್ಬರು ನನ್ನನ್ನು ಮುಟ್ಟಿದ್ದಾರೆ; ಯಾಕಂದರೆ ನನ್ನಿಂದ ಶಕ್ತಿಯು ಹೊರಟಿತೆಂದು ನನಗೆ ತಿಳಿಯಿತು ಅಂದನು.
8:47b.LUK.008.047 ಆ ಸ್ತ್ರೀಯು ತಾನು ಮರೆಯಾಗಿಲ್ಲವೆಂದು ತಿಳಿದು ನಡುಗುತ್ತಾ ಬಂದು ಆತನ ಮುಂದೆ ಬಿದ್ದು ಯಾವ ಕಾರಣದಿಂದ ಆಕೆಯು ಆತನನ್ನು ಮುಟ್ಟಿದ ಳೆಂದೂ ಹೇಗೆ ತಾನು ಕೂಡಲೆ ಸ್ವಸ್ಥಳಾದಳೆಂದೂ ಎಲ್ಲಾ ಜನರ ಮುಂದೆ ಆತನಿಗೆ ತಿಳಿಯಪಡಿಸಿದಳು.
8:48b.LUK.008.048 ಆಗ ಆತನು ಆಕೆಗೆ--ಮಗಳೇ, ಸಮಾಧಾನ ದಿಂದಿರು; ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥ ಮಾಡಿಯದೆ; ಸ್ವಸ್ಥಳಾಗಿ ಹೋಗು ಅಂದನು.
8:49b.LUK.008.049 ಆತನು ಇನ್ನೂ ಮಾತನಾಡುತ್ತಿದ್ದಾಗ ಸಭಾಮಂದಿ ರದ ಅಧಿಕಾರಿಯ ಮನೆಯಿಂದ ಒಬ್ಬನು ಬಂದು ಅವನಿಗೆ--ನಿನ್ನ ಮಗಳು ಸತ್ತಿದ್ದಾಳೆ, ಬೋಧಕನಿಗೆ ತೊಂದರೆ ಕೊಡಬೇಡ ಅಂದನು.
8:50b.LUK.008.050 ಆದರೆ ಯೇಸು ಅದನ್ನು ಕೇಳಿ ಪ್ರತ್ಯುತ್ತರವಾಗಿ ಅವನಿಗೆ--ಭಯಪಡ ಬೇಡ, ನಂಬಿಕೆ ಮಾತ್ರ ಇರಲಿ; ಅವಳು ಸ್ವಸ್ಥಳಾಗುವಳು ಎಂದು ಹೇಳಿದನು.
8:51b.LUK.008.051 ಆತನು ಮನೆಯೊಳಕ್ಕೆ ಬಂದಾಗ ಪೇತ್ರ ಯಾಕೋಬ ಯೋಹಾನ ಮತ್ತು ಹುಡುಗಿಯ ತಂದೆತಾಯಿಗಳ ಹೊರತು ಯಾರನ್ನೂ ಒಳಗೆ ಹೋಗಗೊಡಿಸಲಿಲ್ಲ.
8:52b.LUK.008.052 ಎಲ್ಲರೂ ಅಳುತ್ತಾ ಹುಡುಗಿಗಾಗಿ ಗೋಳಾಡುತ್ತಿದ್ದರು. ಆದರೆ ಆತನು-- ಅಳಬೇಡಿರಿ, ಆಕೆಯು ಸತ್ತಿಲ್ಲ; ಆದರೆ ನಿದ್ರೆ ಮಾಡು ತ್ತಾಳೆ ಅಂದನು.
8:53b.LUK.008.053 ಆಕೆಯು ಸತ್ತಿದ್ದಾಳೆಂದು ತಿಳಿದಿದ್ದ ರಿಂದ ಅವರು ಆತನನ್ನು ಹಾಸ್ಯಮಾಡಿ ನಕ್ಕರು
8:54b.LUK.008.054 ಆದರೆ ಆತನು ಅವರೆಲ್ಲರನ್ನು ಹೊರಗೆ ಕಳುಹಿಸಿ ಆಕೆಯ ಕೈಹಿಡಿದು-- ಹುಡುಗಿಯೇ, ಎದ್ದೇಳು ಎಂದು ಕರೆದನು.
8:55b.LUK.008.055 ಆಗ ಆಕೆಯು ಬದುಕಿ ಕೂಡಲೆ ಎದ್ದಳು; ಆಕೆಗೆ ಊಟಕ್ಕೆ ಕೊಡುವಂತೆ ಆತನು ಅಪ್ಪಣೆ ಕೊಟ್ಟನು.ಆಗ ಆಕೆಯ ತಂದೆತಾಯಿಗಳು ಬೆರಗಾದರು; ಆದರೆ ನಡೆದದ್ದನ್ನು ಅವರು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು.
8:56b.LUK.008.056 ಆಗ ಆಕೆಯ ತಂದೆತಾಯಿಗಳು ಬೆರಗಾದರು; ಆದರೆ ನಡೆದದ್ದನ್ನು ಅವರು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು.
9
9:1b.LUK.009.001 ತರುವಾಯ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವದಕ್ಕೂ ರೋಗಗಳನ್ನು ಸ್ವಸ್ಥ ಮಾಡುವದಕ್ಕೂ ಶಕ್ತಿಯನ್ನು ಮತ್ತು ಅಧಿಕಾರವನ್ನು ಕೊಟ್ಟನು.
9:2b.LUK.009.002 ದೇವರ ರಾಜ್ಯವನ್ನು ಸಾರುವದಕ್ಕೂ ರೋಗಿಗಳನ್ನು ಸ್ವಸ್ಥಮಾಡುವದಕ್ಕೂ ಆತನು ಅವರನ್ನು ಕಳುಹಿಸಿಕೊಟ್ಟನು.
9:3b.LUK.009.003 ಆತನು ಅವರಿಗೆ--ನೀವು ಪ್ರಯಾಣಕ್ಕಾಗಿ ಕೋಲುಗಳನ್ನಾಗಲೀ ಚೀಲವನ್ನಾ ಗಲೀ ರೊಟ್ಟಿಯನ್ನಾಗಲೀ ಹಣವನ್ನಾಗಲೀ ಏನೂ ತಕ್ಕೊಳ್ಳಬೇಡಿರಿ; ಇದಲ್ಲದೆ ನಿಮಗೆ ಎರಡು ಅಂಗಿಗಳೂ ಇರಬಾರದು.
9:4b.LUK.009.004 ನೀವು ಯಾವದಾದರೂ ಮನೆಯನ್ನು ಪ್ರವೇಶಿಸಿದಾಗ ಅಲ್ಲೇ ಇದ್ದು ಅಲ್ಲಿಂದಲೇ ಹೊರಡಿರಿ.
9:5b.LUK.009.005 ಯಾರಾದರೂ ನಿಮ್ಮನ್ನು ಅಂಗೀಕರಿಸದೆ ಹೋದರೆ ನೀವು ಆ ಪಟ್ಟಣದ ಹೊರಗೆ ಹೋದಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದ ಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ ಅಂದನು.
9:6b.LUK.009.006 ಅವರು ಊರುಗಳನ್ನು ಹಾದು ಹೋಗುವಾಗ ಸುವಾರ್ತೆಯನ್ನು ಸಾರುತ್ತಾ ಎಲ್ಲಾ ಕಡೆಗಳಲ್ಲಿ ಸ್ವಸ್ಥ ಮಾಡುತ್ತಾ ಹೋದರು.
9:7b.LUK.009.007 ಚತುರಾಧಿಪತಿಯಾದ ಹೆರೋದನು ಯೇಸು ಮಾಡಿದವುಗಳನ್ನೆಲ್ಲಾ ಕೇಳಿ ಕಳವಳಗೊಂಡನು. ಯಾಕಂದರೆ ಯೋಹಾನನು ಸತ್ತವರೊಳಗಿಂದ ಎದ್ದಿ ದ್ದಾನೆಂದು ಕೆಲವರು ಹೇಳುತ್ತಿದ್ದರು.
9:8b.LUK.009.008 ಎಲೀಯನು ಪ್ರತ್ಯಕ್ಷವಾಗಿದ್ದಾನೆಂದು ಕೆಲವರು ಹಿಂದಿನ ಕಾಲದ ಪ್ರವಾದಿಗಳಲ್ಲಿ ಒಬ್ಬನು ಎದ್ದಿದ್ದಾನೆಂದು ಇನ್ನು ಬೇರೆ ಯವರು ಹೇಳುತ್ತಿದ್ದರು.
9:9b.LUK.009.009 ಆಗ ಹೆರೋದನು--ನಾನು ಯೋಹಾನನ ತಲೆ ಹೊಯ್ಸಿದ್ದೇನೆ; ಆದರೆ ನಾನು ಯಾರನ್ನು ಕುರಿತು ಈ ವಿಷಯಗಳನ್ನು ಕೇಳು ತ್ತೇನೋ ಇವನು ಯಾರು ಎಂದು ಹೇಳಿ ಅವನು ಆತನನ್ನು ನೋಡಲು ಅಪೇಕ್ಷಿಸಿದನು.
9:10b.LUK.009.010 ತರುವಾಯ ಅಪೊಸ್ತಲರು ಹಿಂತಿರುಗಿ ಬಂದು ತಾವು ಮಾಡಿದವುಗಳನ್ನೆಲ್ಲಾ ಆತನಿಗೆ ತಿಳಿಸಿದರು. ಆಗ ಆತನು ಬೇತ್ಸಾಯಿದ ಎಂದು ಕರೆಯಲ್ಪಟ್ಟ ಪಟ್ಟಣಕ್ಕೆ ಸಂಬಂಧಿಸಿದ ಅರಣ್ಯಸ್ಥಳಕ್ಕೆ ಪ್ರತ್ಯೇಕವಾಗಿ ಅವರನ್ನು ಕರೆದುಕೊಂಡು ಹೋದನು.
9:11b.LUK.009.011 ಆಗ ಜನರು ಅದನ್ನು ತಿಳಿದು ಆತನನ್ನು ಹಿಂಬಾಲಿಸಲು ಆತನು ಅವರನ್ನು ಅಂಗೀಕರಿಸಿ ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ ಸ್ವಸ್ಥತೆ ಬೇಕಾಗಿದ್ದವರನ್ನು ಸ್ವಸ್ಥ ಮಾಡಿದನು.
9:12b.LUK.009.012 ಸಂಜೆಯಾಗು ತ್ತಿದ್ದಾಗ ಹನ್ನೆರಡು ಮಂದಿ ಬಂದು ಆತನಿಗೆ--ಈ ಜನಸಮೂಹವು ಸುತ್ತಲಿರುವ ಊರುಗಳಿಗೂ ಸೀಮೆಗಳಿಗೂ ಹೋಗಿ ಇಳುಕೊಂಡು ಆಹಾರವನ್ನು ದೊರಕಿಸಿಕೊಳ್ಳುವಂತೆ ಅವರನ್ನು ಕಳುಹಿಸಿಬಿಡು; ಯಾಕಂದರೆ ನಾವು ಇಲ್ಲಿ ಅರಣ್ಯ ಸ್ಥಳದಲ್ಲಿ ಇದ್ದೇವಲ್ಲಾ ಅಂದರು.
9:13b.LUK.009.013 ಆದರೆ ಆತನು ಅವರಿಗೆ--ನೀವೇ ಅವ ರಿಗೆ ಊಟಕ್ಕೆ ಕೊಡಿರಿ ಅಂದನು. ಅದಕ್ಕೆ ಅವರು--ನಾವು ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡುಕೊಳ್ಳದ ಹೊರತು ನಮ್ಮಲ್ಲಿ ಐದು ರೊಟ್ಟಿ ಎರಡು ವಿಾನುಗಳಿಗಿಂತ ಹೆಚ್ಚೇನೂ ಇಲ್ಲ ಅಂದರು.
9:14b.LUK.009.014 ಯಾಕಂದರೆ ಅವರು ಹೆಚ್ಚು ಕಡಿಮೆ ಗಂಡಸರೇ ಐದು ಸಾವಿರ ಇದ್ದರು. ಆಗ ಆತನು ತನ್ನ ಶಿಷ್ಯ ರಿಗೆ--ಪಂಕ್ತಿಗಳಲ್ಲಿ ಐವತ್ತರಂತೆ ಅವರನ್ನು ಕೂಡ್ರಿಸಿರಿ ಅಂದನು.
9:15b.LUK.009.015 ಅವರು ಅದರಂತೆಯೇ ಮಾಡಿ ಅವರೆ ಲ್ಲರನ್ನೂ ಕೂಡ್ರಿಸಿದರು.
9:16b.LUK.009.016 ತರುವಾಯ ಆತನು ಐದು ರೊಟ್ಟಿಗಳನ್ನೂ ಎರಡು ವಿಾನುಗಳನ್ನೂ ತಕ್ಕೊಂಡು ಪರಲೋಕದ ಕಡೆಗೆ ನೋಡಿ ಅವುಗಳನ್ನು ಆಶೀರ್ವದಿಸಿ ಮುರಿದು ಜನಸಮೂಹಕ್ಕೆ ಹಂಚುವಂತೆ ಶಿಷ್ಯರಿಗೆ ಕೊಟ್ಟನು.
9:17b.LUK.009.017 ಆಗ ಅವರೆಲ್ಲರೂ ತಿಂದು ತೃಪ್ತರಾದರು; ಉಳಿದ ತುಂಡುಗಳನ್ನು ಕೂಡಿಸಲು ಅವರಿಗೆ ಹನ್ನೆರಡು ಪುಟ್ಟಿಗಳು ಉಳಿದವು.
9:18b.LUK.009.018 ಇದಾದ ಮೇಲೆ ಆತನು ಒಬ್ಬನೇ ಪ್ರಾರ್ಥಿಸು ತ್ತಿದ್ದಾಗ ಆತನ ಶಿಷ್ಯರು ಆತನೊಂದಿಗೆ ಇದ್ದರು; ಆಗ ಆತನು ಅವರಿಗೆ--ಜನರು ನನ್ನನ್ನು ಯಾರು ಅನ್ನುತ್ತಾರೆ ಎಂದು ಕೇಳಿದನು.
9:19b.LUK.009.019 ಅವರು ಪ್ರತ್ಯುತ್ತರವಾಗಿ--ಬಾಪ್ತಿಸ್ಮ ಮಾಡಿಸುವ ಯೋಹಾನನು ಅನ್ನುತ್ತಾರೆ; ಆದರೆ ಕೆಲವರು--ಎಲೀಯನು; ಬೇರೆ ಕೆಲವರು--ಪೂರ್ವಕಾಲದ ಪ್ರವಾದಿಗಳಲ್ಲಿ ಒಬ್ಬನು ತಿರಿಗಿ ಎದ್ದಿದ್ದಾನೆ ಅನ್ನುತ್ತಾರೆ ಎಂದು ಹೇಳಿದರು.
9:20b.LUK.009.020 ಆತನು ಅವರಿಗೆ--ಆದರೆ ನಾನು ಯಾರಾಗಿದ್ದೇನೆಂದು ನೀವು ಅನ್ನುತ್ತೀರಿ ಎಂದು ಕೇಳಲು ಪೇತ್ರನು ಪ್ರತ್ಯುತ್ತರ ವಾಗಿ--ದೇವರ ಕ್ರಿಸ್ತನು ಎಂದು ಹೇಳಿದನು.
9:21b.LUK.009.021 ಆ ಸಂಗತಿಯನ್ನು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿ--
9:22b.LUK.009.022 ಮನುಷ್ಯಕುಮಾ ರನು ಬಹಳ ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಪ್ರಧಾನಯಾಜಕರಿಂದಲೂ ಶಾಸ್ತ್ರಿಗಳಿಂದಲೂ ತಿರಸ್ಕರಿ ಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವದು ಅಗತ್ಯವಾಗಿದೆ ಎಂದು ಆಜ್ಞಾಪಿಸಿ ದನು.
9:23b.LUK.009.023 ಆತನು ಅವರೆಲ್ಲರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಪ್ರತಿದಿನ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ;
9:24b.LUK.009.024 ಯಾವನಾದರೂ ತನ್ನ ಪ್ರಾಣವನ್ನು ಉಳಿಸಿಕೊಳ್ಳುವದಾದರೆ ಅದನ್ನು ಕಳಕೊಳ್ಳುವನು; ಆದರೆ ನನ್ನ ನಿಮಿತ್ತವಾಗಿ ಯಾವನಾದರೂ ತನ್ನ ಪ್ರಾಣವನ್ನು ಕಳಕೊಂಡರೆ ಅದನ್ನು ಉಳಿಸಿಕೊಳ್ಳುವನು.
9:25b.LUK.009.025 ಇದಲ್ಲದೆ ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡು ತನ್ನನ್ನು ತಾನೇ ಹಾಳು ಮಾಡಿ ಕೊಂಡರೆ ಇಲ್ಲವೆ ನಷ್ಟಪಡಿಸಿಕೊಂಡರೆ ಅವನಿಗೆ ಪ್ರಯೋಜನವೇನು?
9:26b.LUK.009.026 ಯಾವನಾದರೂ ನನ್ನ ಮತ್ತು ನನ್ನ ವಾಕ್ಯಗಳ ವಿಷಯದಲ್ಲಿ ನಾಚಿಕೊಳ್ಳುವದಾದರೆ ಮನುಷ್ಯಕುಮಾರನು ತನ್ನ ಮತ್ತು ತನ್ನ ತಂದೆಯ ಪ್ರಭಾವದೊಡನೆಯೂ ಪರಿಶುದ್ಧದೂತರೊಂದಿಗೂ ಬರುವಾಗ ಅವನ ವಿಷಯದಲ್ಲಿ ಆತನು ನಾಚಿಕೊಳ್ಳು ವನು.
9:27b.LUK.009.027 ಆದರೆ ನಾನು ನಿಮಗೆ ಸತ್ಯವಾಗಿ ಹೇಳು ತ್ತೇನೆ, ಇಲ್ಲಿ ನಿಂತುಕೊಂಡಿರುವ ಕೆಲವರು ದೇವರ ರಾಜ್ಯವನ್ನು ನೋಡುವ ತನಕ ಮರಣವನ್ನು ರುಚಿಸುವದೇ ಇಲ್ಲ ಅಂದನು.
9:28b.LUK.009.028 ಈ ಮಾತುಗಳನ್ನು ಹೇಳಿ ಸುಮಾರು ಎಂಟು ದಿನಗಳಾದ ಮೇಲೆ ಆದದ್ದೇನಂದರೆ, ಆತನು ಪೇತ್ರ ಯೋಹಾನ ಮತ್ತು ಯಾಕೋಬರನ್ನು ಕರಕೊಂಡು ಪ್ರಾರ್ಥನೆ ಮಾಡುವದಕ್ಕಾಗಿ ಬೆಟ್ಟವನ್ನೇರಿದನು.
9:29b.LUK.009.029 ಆತನು ಪ್ರಾರ್ಥನೆ ಮಾಡುತ್ತಿದ್ದಾಗ ಆತನ ಮುಖ ಭಾವವು ಬದಲಾಯಿತು; ಉಡುಪು ಬೆಳ್ಳಗಾಗಿ ಪ್ರಕಾಶಮಾನವಾಯಿತು.
9:30b.LUK.009.030 ಇಗೋ, ಮೋಶೆ ಮತ್ತು ಎಲೀಯ ಎಂಬ ಇಬ್ಬರು ಪುರುಷರು ಆತನೊಂದಿಗೆ ಮಾತನಾಡುತ್ತಿದ್ದರು.
9:31b.LUK.009.031 ಇವರು ಮಹಿಮೆಯಲ್ಲಿ ಕಾಣಿಸಿಕೊಂಡು ಆತನು ಯೆರೂಸ ಲೇಮಿನಲ್ಲಿ ಪೂರೈಸುವದಕ್ಕಿದ್ದ ಆತನ ಮರಣದ ವಿಷಯವಾಗಿ ಮಾತನಾಡುತ್ತಿದ್ದರು.
9:32b.LUK.009.032 ಆದರೆ ಪೇತ್ರನೂ ಅವನ ಸಂಗಡ ಇದ್ದವರೂ ನಿದ್ರೆಯಿಂದ ಭಾರವುಳ್ಳವರಾಗಿದ್ದರು; ಅವರು ಎಚ್ಚತ್ತಾಗ ಆತನ ಮಹಿಮೆಯನ್ನೂ ಆತನ ಕೂಡ ನಿಂತಿದ್ದ ಇಬ್ಬರು ಪುರಷರನ್ನೂ ನೋಡಿದರು.
9:33b.LUK.009.033 ಇದಾದ ಮೇಲೆ ಅವರು ಹೋಗುತ್ತಿದ್ದಾಗ ಪೇತ್ರನು ಯೇಸುವಿಗೆ--ಬೋಧಕನೇ, ನಾವು ಇಲ್ಲೇ ಇರುವದು ನಮಗೆ ಒಳ್ಳೇದು; ನಾವು ನಿನಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು ಮೂರು ಗುಡಾರಗಳನ್ನು ಮಾಡುವೆವು ಅಂದನು. ತಾನು ಹೇಳಿದ್ದನ್ನು ಅವನು ಅರಿಯದೆ ಇದ್ದನು.
9:34b.LUK.009.034 ಹೀಗೆ ಅವನು ಮಾತನಾಡು ತ್ತಿದ್ದಾಗಲೇ ಮೇಘವು ಬಂದು ಅವರನ್ನು ಕವಿದು ಕೊಂಡಿತು ಮತ್ತು ಅವರು ಆ ಮೇಘದೊಳಗೆ ಪ್ರವೇ ಶಿಸುತ್ತಿದ್ದಾಗ ಅವರು ಭಯಪಟ್ಟರು.
9:35b.LUK.009.035 ಆಗ ಮೇಘ ದೊಳಗಿಂದ--ಈತನು ಪ್ರಿಯನಾಗಿರುವ ನನ್ನ ಮಗನು; ಈತನ ಮಾತನ್ನು ಕೇಳಿರಿ ಎಂದು ಹೇಳುವ ಧ್ವನಿಯಾಯಿತು.
9:36b.LUK.009.036 ಆ ಧ್ವನಿಯಾದ ನಂತರ (ಅವರು) ಯೇಸುವನ್ನು ಮಾತ್ರ ನೋಡಿದರು. ಅವರು ನೋಡಿ ದವುಗಳನ್ನು ಆ ದಿವಸಗಳಲ್ಲಿ ಯಾರಿಗೂ ಹೇಳದೆ ಸುಮ್ಮನಿದ್ದರು.
9:37b.LUK.009.037 ಇದಾದ ಮೇಲೆ ಮರುದಿವಸ ಅವರು ಬೆಟ್ಟ ದಿಂದ ಕೆಳಗಿಳಿದು ಬಂದಾಗ ಬಹಳ ಜನರು ಆತನನ್ನು ಸಂಧಿಸಿದರು.
9:38b.LUK.009.038 ಆಗ ಇಗೋ, ಆ ಗುಂಪಿನೊಳಗಿಂದ ಒಬ್ಬ ಮನುಷ್ಯನು ಕೂಗಿ--ಬೋಧಕನೇ, ನನ್ನ ಮಗನ ಮೇಲೆ ದೃಷ್ಟಿಯಿಡು ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ; ಯಾಕಂದರೆ ಅವನು ನನಗೆ ಒಬ್ಬನೇ ಮಗನು.
9:39b.LUK.009.039 ಇಗೋ, ದೆವ್ವವು ಅವನನ್ನು ಹಿಡಿಯುತ್ತಲೇ ಅವನು ಫಕ್ಕನೆ ಕೂಗಿಕೊಳ್ಳುತ್ತಾನೆ; ಇದಲ್ಲದೆ ಅದು ನೊರೆ ಸುರಿಯುವಷ್ಟು ಅವನನ್ನು ಒದ್ದಾಡಿಸುವದಲ್ಲದೆ ಜಜ್ಜುವದು. ಅದು ಅವನನ್ನು ಬಿಟ್ಟುಹೋಗುವದು ಕಷ್ಟ.
9:40b.LUK.009.040 ಅದನ್ನು ಬಿಡಿಸುವಂತೆ ನಾನು ನಿನ್ನ ಶಿಷ್ಯರನ್ನು ಬೇಡಿಕೊಂಡೆನು; ಆದರೆ ಅದು ಅವರಿಂದ ಆಗಲಿಲ್ಲ ಅಂದನು.
9:41b.LUK.009.041 ಯೇಸು ಪ್ರತ್ಯುತ್ತರ ವಾಗಿ--ಓ ನಂಬಿಕೆಯಿಲ್ಲದ ವಕ್ರಸಂತತಿಯೇ, ನಾನು ಎಷ್ಟು ಕಾಲ ನಿಮ್ಮೊಂದಿಗಿರಲಿ ಮತ್ತು ನಿಮ್ಮನ್ನು ಸಹಿಸಲಿ ಎಂದು ಹೇಳಿ--ನಿನ್ನ ಮಗನನ್ನು ಇಲ್ಲಿಗೆ ಕರಕೊಂಡು ಬಾ ಅಂದನು.
9:42b.LUK.009.042 ಅವನು ಇನ್ನೂ ಬರುತ್ತಿದ್ದಾಗಲೇ ದೆವ್ವವು ಅವನನ್ನು ಒದ್ದಾಡಿಸಿ ನೆಲಕ್ಕೆ ಅಪ್ಪಳಿಸಿತು. ಯೇಸು ಆ ಅಶುದ್ಧಾತ್ಮವನ್ನು ಗದರಿಸಿ ಮಗನನ್ನು ಸ್ವಸ್ಥಮಾಡಿ ಅವನನ್ನು ಅವನ ತಂದೆಗೆ ತಿರಿಗಿ ಒಪ್ಪಿ ಸಿದನು.
9:43b.LUK.009.043 ಆಗ ಅವರೆಲ್ಲರೂ ದೇವರ ಮಹತ್ತಾದ ಶಕ್ತಿಗಾಗಿ ಬೆರಗಾದರು.ಆದರೆ ಯೇಸು ಮಾಡಿದ ಎಲ್ಲಾ ಕಾರ್ಯಗಳಿಗಾಗಿ ಅವರಲ್ಲಿ ಪ್ರತಿಯೊಬ್ಬನೂ ಆಶ್ಚರ್ಯಪಡುತ್ತಿರುವಲ್ಲಿ ಆತನು ತನ್ನ ಶಿಷ್ಯರಿಗೆ--
9:44b.LUK.009.044 ಈ ಮಾತುಗಳು ನಿಮ್ಮ ಕಿವಿಗಳ ಆಳಕ್ಕೆ ಇಳಿಯಲಿ; ಯಾಕಂದರೆ ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುವನು ಎಂದು ಹೇಳಿದನು.
9:45b.LUK.009.045 ಆದರೆ ಅವರು ಈ ಮಾತನು ತಿಳಿದುಕೊಳ್ಳಲಿಲ್ಲ, ಅವರು ಗ್ರಹಿಸಲಾರದಂತೆ ಅದು ಅವರಿಗೆ ಮರೆಯಾಗಿತ್ತು. ಮತ್ತು ಆ ಮಾತನ್ನು ಕುರಿತು ಆತನನ್ನು ಕೇಳುವದಕ್ಕೆ ಅವರು ಭಯಪಟ್ಟರು.
9:46b.LUK.009.046 ಆಗ ತಮ್ಮಲ್ಲಿ ಯಾವನು ಎಲ್ಲರಿಗಿಂತ ದೊಡ್ಡ ವನು ಎಂಬ ತರ್ಕವು ಅವರೊಳಗೆ ಎದ್ದಿತು.
9:47b.LUK.009.047 ಆದರೆ ಯೇಸು ಅವರ ಹೃದಯದ ಆಲೋಚನೆಯನ್ನು ತಿಳಿದವನಾಗಿ ಒಂದು ಮಗುವನ್ನು ತಕ್ಕೊಂಡು ತನ್ನ ಬಳಿಯಲ್ಲಿ ನಿಲ್ಲಿಸಿ
9:48b.LUK.009.048 ಅವರಿಗೆ ಯಾವನಾದರೂ ಈ ಮಗುವನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿಕೊಂಡರೆ ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಯಾವನಾದರೂ ನನ್ನನ್ನು ಅಂಗೀಕರಿಸಿಕೊಂಡರೆ ನನ್ನನ್ನು ಕಳುಹಿಸಿ ಕೊಟ್ಟಾತನನ್ನೇ ಅಂಗೀಕರಿಸಿಕೊಳ್ಳುತ್ತಾನೆ. ಯಾಕಂ ದರೆ ನಿಮ್ಮೆಲ್ಲರಲ್ಲಿ ಚಿಕ್ಕವನಾಗಿರುವವನೇ ದೊಡ್ಡ
9:49b.LUK.009.049 ಆಗ ಯೋಹಾನನು--ಬೋಧಕನೇ, ಒಬ್ಬನು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವದನ್ನು ನಾವು ನೋಡಿ ಅವನಿಗೆ ಅಡ್ಡಿಮಾಡಿದೆವು; ಯಾಕಂದರೆ ಅವನು ನಮ್ಮೊಂದಿಗೆ (ನಿನ್ನನ್ನು) ಹಿಂಬಾಲಿ ಸುವದಿಲ್ಲ ಅಂದನು.
9:50b.LUK.009.050 ಅದಕ್ಕೆ ಯೇಸು--ಅವನಿಗೆ ಅಡ್ಡಿ ಮಾಡಬೇಡಿರಿ; ಯಾಕಂದರೆ ನಮಗೆ ವಿರೋಧ ವಾಗಿರದವನು ನಮ್ಮ ಪಕ್ಷದವನೇ ಎಂದು ಹೇಳಿದನು.
9:51b.LUK.009.051 ಇದಾದಮೇಲೆ ಯೇಸು ತಾನು ಮೇಲಕ್ಕೆ ಅಂಗೀ ಕರಿಸಲ್ಪಡುವ ಸಮಯವು ಬಂದಾಗ ಯೆರೂಸಲೇಮಿಗೆ ಹೋಗುವದಕ್ಕಾಗಿ ಆತನು ತನ್ನ ಮುಖವನ್ನು ದೃಢಮಾಡಿಕೊಂಡು
9:52b.LUK.009.052 ತನಗೆ ಮುಂದಾಗಿ ದೂತರನ್ನು ಕಳುಹಿಸಿದನು. ಅವರು ಹೋಗಿ ಆತನಿಗಾಗಿ ಸಿದ್ಧ ಪಡಿಸುವಂತೆ ಸಮಾರ್ಯದ ಒಂದು ಹಳ್ಳಿಯೊಳಕ್ಕೆ ಪ್ರವೇಶಿಸಿದರು.
9:53b.LUK.009.053 ಆದರೆ ಅವರು ಆತನನ್ನು ಅಂಗೀಕರಿಸಲಿಲ್ಲ. ಯಾಕಂದರೆ ಆತನು ಯೆರೂಸಲೇ ಮಿಗೆ ಹೋಗುವಾತನೋ ಎಂಬಂತೆ ಆತನ ಮುಖ ವಿತ್ತು.
9:54b.LUK.009.054 ಆತನ ಶಿಷ್ಯರಾದ ಯಾಕೋಬ ಯೋಹಾನರು ಇದನ್ನು ನೋಡಿ--ಕರ್ತನೇ, ಎಲೀಯನು ಮಾಡಿದ ಪ್ರಕಾರ ಅವರನ್ನು ದಹಿಸಿಬಿಡುವಂತೆ ಆಕಾಶದಿಂದ ಬೆಂಕಿ ಬೀಳುವ ಹಾಗೆ ನಾವು ಅಪ್ಪಣೆಕೊಡಲು ನಿನಗೆ ಮನಸ್ಸುಂಟೋ ಎಂದು ಅವರು ಕೇಳಿದರು.
9:55b.LUK.009.055 ಆದರೆ ಆತನು ತಿರುಗಿಕೊಂಡು ಅವರನ್ನು ಗದರಿಸಿ--ನೀವು ಯಾವ ತರವಾದ ಆತ್ಮದವರಾಗಿದ್ದೀರೆಂದು ನಿಮಗೆ ತಿಳಿಯದು.
9:56b.LUK.009.056 ಯಾಕಂದರೆ ಮನುಷ್ಯಕುಮಾರನು ಮನುಷ್ಯರ ಪ್ರಾಣಗಳನ್ನು ನಾಶಮಾಡುವದಕ್ಕಾಗಿ ಅಲ್ಲ, ಅವರನ್ನು ರಕ್ಷಿಸುವದಕ್ಕಾಗಿ ಬಂದನು ಎಂದು ಹೇಳಿದನು. ಅವರು ಮತ್ತೊಂದು ಹಳ್ಳಿಗೆ ಹೋದರು.
9:57b.LUK.009.057 ಇದಾದ ಮೇಲೆ ಅವರು ದಾರಿಯಲ್ಲಿ ಹೋಗು ತ್ತಿರುವಾಗ ಒಬ್ಬಾನೊಬ್ಬ ಮನುಷ್ಯನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುವೆನು ಅಂದನು.
9:58b.LUK.009.058 ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ ಮತ್ತು ಆಕಾಶದ ಪಕ್ಷಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆ ಇಡುವಷ್ಟೂ ಸ್ಥಳವಿಲ್ಲ ಅಂದನು.
9:59b.LUK.009.059 ಇದಲ್ಲದೆ ಆತನು ಮತ್ತೊಬ್ಬನಿಗೆ--ನನ್ನನ್ನು ಹಿಂಬಾಲಿಸು ಅಂದನು. ಆದರೆ ಅವನು--ಕರ್ತನೇ, ನಾನು ಹೋಗಿ ಮೊದಲು ನನ್ನ ತಂದೆಯನ್ನು ಹೂಣಿಡುವಂತೆ ಅಪ್ಪಣೆಕೊಡು ಅಂದನು.
9:60b.LUK.009.060 ಆದರೆ ಯೇಸು ಅವ ನಿಗೆ--ಸತ್ತವರು ತಮ್ಮ ಸತ್ತವರನ್ನು ಹೂಣಿಡಲಿ; ಆದರೆ ನೀನು ಹೋಗಿ ದೇವರ ರಾಜ್ಯವನ್ನು ಸಾರು ಅಂದನು.
9:61b.LUK.009.061 ಇದಲ್ಲದೆ ಮತ್ತೊಬ್ಬನು ಸಹ--ಕರ್ತನೇ, ನಾನು ನಿನ್ನನ್ನು ಹಿಂಬಾಲಿಸುವೆನು; ಆದರೆ ನಾನು ಮೊದಲು ಹೋಗಿ ನನ್ನ ಮನೆಯಲ್ಲಿದ್ದವರಿಗೆ ಬೀಳ್ಕೊಡುವಂತೆ ನನಗೆ ಅಪ್ಪಣೆಕೊಡು ಅಂದನು.ಆಗ ಯೇಸು ಅವನಿಗೆ--ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡುವವನು ದೇವರ ರಾಜ್ಯಕ್ಕೆ ತಕ್ಕವನಲ್ಲ ಅಂದನು.
9:62b.LUK.009.062 ಆಗ ಯೇಸು ಅವನಿಗೆ--ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡುವವನು ದೇವರ ರಾಜ್ಯಕ್ಕೆ ತಕ್ಕವನಲ್ಲ ಅಂದನು.
10
10:1b.LUK.010.001 ಇವುಗಳಾದ ಮೇಲೆ ಕರ್ತನು ಬೇರೆ ಎಪ್ಪತ್ತು ಮಂದಿಯನ್ನು ಸಹ ನೇಮಿಸಿ ತಾನೇ ಸ್ವತಃ ಹೋಗಬೇಕೆಂದಿದ್ದ ಪ್ರತಿಯೊಂದು ಪಟ್ಟಣಕ್ಕೂ ಸ್ಥಳಕ್ಕೂ ಇಬ್ಬಿಬ್ಬರನ್ನಾಗಿ ತನ್ನ ಮುಂದಾಗಿ ಕಳುಹಿಸಿದನು.
10:2b.LUK.010.002 ಆತನು ಅವರಿಗೆ--ಬೆಳೆಯು ನಿಜವಾಗಿಯೂ ಬಹಳ; ಆದರೆ ಕೆಲಸದವರು ಸ್ವಲ್ಪ; ಆದದರಿಂದ ಬೆಳೆಯ ಯಜಮಾನನು ತನ್ನ ಬೆಳೆಗೆ ಕೆಲಸದವರನ್ನು ಕಳುಹಿಸಬೇಕೆಂದು ನೀವು ಪ್ರಾರ್ಥನೆಮಾಡಿರಿ.
10:3b.LUK.010.003 ಹೋಗಿರಿ, ಇಗೋ, ತೋಳಗಳ ಮಧ್ಯದಲ್ಲಿ ಕುರಿಮರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ.
10:4b.LUK.010.004 ಹವ್ಮೆಾಣಿಯನ್ನಾಗಲೀ ಚೀಲವನ್ನಾಗಲೀ ಕೆರಗಳನ್ನಾಗಲೀ ತಕ್ಕೊಳ್ಳಬೇಡಿರಿ; ಮತ್ತು ದಾರಿಯಲ್ಲಿ ಯಾರನ್ನೂ ವಂದಿಸಬೇಡಿರಿ.
10:5b.LUK.010.005 ನೀವು ಯಾವ ಮನೆಯಲ್ಲಿಯಾದರೂ ಪ್ರವೇಶಿಸುವಾಗ ಮೊದಲು--ಈ ಮನೆಗೆ ಸಮಾಧಾನವಾಗಲಿ ಎಂದು ಹೇಳಿರಿ.
10:6b.LUK.010.006 ಅಲ್ಲಿ ಸಮಾಧಾನದ ಮಗನು ಇದ್ದರೆ ನಿಮ್ಮ ಸಮಾಧಾನವು ಅವರ ಮೇಲೆ ಇರುವದು; ಇಲ್ಲದಿದ್ದರೆ ಅದು ನಿಮಗೆ ಹಿಂದಿರು ಗುವದು.
10:7b.LUK.010.007 ಅದೇ ಮನೆಯಲ್ಲಿದ್ದು ಅವರು ಕೊಟ್ಟದ್ದನ್ನು ತಿಂದು ಕುಡಿಯಿರಿ; ಯಾಕಂದರೆ ಕೆಲಸದವನು ತನ್ನ ಕೂಲಿಗೆ ಯೋಗ್ಯನು. ಮನೆಯಿಂದ ಮನೆಗೆ ಹೋಗ ಬೇಡಿರಿ;
10:8b.LUK.010.008 ಯಾವದಾದರೂ ಪಟ್ಟಣದೊಳಗೆ ನೀವು ಪ್ರವೇಶಿಸುವಾಗ ಅವರು ನಿಮ್ಮನ್ನು ಸೇರಿಸಿಕೊಂಡರೆ ನಿಮ್ಮ ಮುಂದೆ ಇಡುವಂಥವುಗಳನ್ನು ತಿನ್ನಿರಿ.
10:9b.LUK.010.009 ಅಲ್ಲಿರುವ ರೋಗಿಗಳನ್ನು ಸ್ವಸ್ಥಮಾಡಿರಿ; ಮತ್ತು ಅವರಿಗೆ--ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂದು ಹೇಳಿರಿ.
10:10b.LUK.010.010 ಆದರೆ ನೀವು ಪ್ರವೇಶಿ ಸುವ ಯಾವ ಪಟ್ಟಣದಲ್ಲಿಯಾದರೂ ಅವರು ನಿಮ್ಮನ್ನು ಸೇರಿಸಿಕೊಳ್ಳದಿದ್ದರೆ ನೀವು ಹೊರಟು ಅದೇ ಬೀದಿ ಗಳಲ್ಲಿ ಹೋಗಿ--
10:11b.LUK.010.011 ನಮ್ಮ ಮೇಲೆ ಅಂಟಿಕೊಂಡಿರುವ ನಿಮ್ಮ ಪಟ್ಟಣದ ಧೂಳನ್ನೇ ನಿಮಗೆ ವಿರೋಧವಾಗಿ ನಾವು ಝಾಡಿಸಿಬಿಡುತ್ತೇವೆ; ಆದಾಗ್ಯೂ ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂಬದು ನಿಮಗೆ ಖಚಿತವಾಗಿ ತಿಳಿದಿರಲಿ ಎಂದು ಹೇಳಿರಿ.
10:12b.LUK.010.012 ಆದರೆ ಆ ದಿನದಲ್ಲಿ ಆ ಪಟ್ಟಣಕ್ಕಿಂತಲೂ ಸೊದೋಮಿನ ಗತಿಯು ಹೆಚ್ಚಾಗಿ ತಾಳಬಹುದಾಗಿರುವದು ಎಂದು ನಾನು ನಿಮಗೆ ಹೇಳುತ್ತೇನೆ.
10:13b.LUK.010.013 ಖೊರಾಜಿನೇ, ನಿನಗೆ ಅಯ್ಯೋ! ಬೇತ್ಸಾಯಿದವೇ, ನಿನಗೆ ಅಯ್ಯೋ! ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಸೀದೋನ್‌ಗಳಲ್ಲಿ ನಡೆದಿದ್ದರೆ ಅಲ್ಲಿಯವರು ಬಹಳ ಕಾಲದ ಹಿಂದೆಯೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರ ಪಡುತ್ತಿದ್ದರು.
10:14b.LUK.010.014 ಆದರೆ ನ್ಯಾಯ ತೀರ್ಪಿನಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್‌ಗಳ ಗತಿಯು ಹೆಚ್ಚಾಗಿ ತಾಳಬಹು ದಾಗಿರುವದು.
10:15b.LUK.010.015 ಆಕಾಶದವರೆಗೂ ಎತ್ತಲ್ಪಟ್ಟಿರುವ ಕಪೆರ್ನೌಮೇ, ನೀನು ಕೆಳಗೆ ಪಾತಾಳಕ್ಕೆ ದೊಬ್ಬ ಲ್ಪಡುವಿ.
10:16b.LUK.010.016 ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುತ್ತಾನೆ; ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುತ್ತಾನೆ; ನನ್ನನ್ನು ತಿರಸ್ಕರಿಸುವವನು ನನ್ನನ್ನು ಕಳುಹಿಸಿದಾತನನ್ನು ತಿರಸ್ಕರಿಸುತ್ತಾನೆ ಅಂದನು.
10:17b.LUK.010.017 ತರುವಾಯ ಆ ಎಪ್ಪತ್ತು ಮಂದಿ ಸಂತೋಷದಿಂದ ಹಿಂತಿರುಗಿ--ಕರ್ತನೇ, ನಿನ್ನ ಹೆಸರಿನಲ್ಲಿ ದೆವ್ವಗಳು ಸಹ ನಮಗೆ ಅಧೀನವಾದವು ಅಂದರು.
10:18b.LUK.010.018 ಆಗ ಆತನು ಅವರಿಗೆ--ಸೈತಾನನು ಮಿಂಚಿನ ಹಾಗೆ ಆಕಾಶದಿಂದ ಬೀಳುವದನ್ನು ನಾನು ನೋಡಿದೆನು.
10:19b.LUK.010.019 ಇಗೋ, ಸರ್ಪಗಳನ್ನೂ ಚೇಳುಗಳನ್ನೂ ತುಳಿಯುವದಕ್ಕೆ ಮತ್ತು ವಿರೋಧಿಯ ಎಲ್ಲಾ ಶಕ್ತಿಯ ಮೇಲೆ ನಾನು ನಿಮಗೆ ಅಧಿಕಾರ ಕೊಡುತ್ತೇನೆ; ಯಾವದೂ ಯಾವ ರೀತಿಯಲ್ಲಿಯೂ ನಿಮಗೆ ಕೇಡು ಮಾಡ ಲಾರದು.
10:20b.LUK.010.020 ಆದಾಗ್ಯೂ ದುರಾತ್ಮಗಳು ನಿಮಗೆ ಅಧೀನವಾದವೆಂದು ಸಂತೋಷಪಡಬೇಡಿರಿ; ಆದರೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿರು ವದರಿಂದಲೇ ಸಂತೋಷಿಸಿರಿ ಅಂದನು.
10:21b.LUK.010.021 ಆ ಗಳಿಗೆಯಲ್ಲಿ ಯೇಸು ಆತ್ಮದಲ್ಲಿ ಉಲ್ಲಾಸ ಗೊಂಡು -- ಓ ತಂದೆಯೇ, ಪರಲೋಕ, ಭೂಲೋಕ ಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿ ಗಳಿಗೂ ಬುದ್ಧಿವಂತರಿಗೂ ಮರೆಮಾಡಿ ಕೂಸುಗಳಿಗೆ ಪ್ರಕಟಮಾಡಿರುವದರಿಂದ ನಿನ್ನನ್ನು ಕೊಂಡಾಡುತ್ತೇನೆ; ಹೌದು, ತಂದೆಯೇ, ಅದು ನಿನ್ನ ದೃ
10:22b.LUK.010.022 ಎಲ್ಲವುಗಳು ನನ್ನ ತಂದೆಯಿಂದ ನನಗೆ ಒಪ್ಪಿಸಲ್ಪಟ್ಟಿವೆ; ತಂದೆಯ ಹೊರತು ಯಾರೂ ಮಗನನ್ನು ಅರಿಯರು. ಮಗನೂ ತಾನು ಯಾರಿಗೆ ತಂದೆಯನ್ನು ಪ್ರಕಟಮಾಡುವನೋ ಅವನೂ ಅಲ್ಲದೆ ಆತನನ್ನು (ತಂದೆಯನ್ನು) ಯಾರೂ ಅರಿತವರಲ್ಲ.
10:23b.LUK.010.023 ಆತನು ತನ್ನ ಶಿಷ್ಯರ ಕಡೆಗೆ ತಿರುಗಿಕೊಂಡು--ನೀವು ನೋಡು ತ್ತಿರುವವುಗಳನ್ನು ನೋಡುವ ಕಣ್ಣುಗಳು ಧನ್ಯವಾದವು ಗಳು ಎಂದು ಪ್ರತ್ಯೇಕವಾಗಿ ಹೇಳಿದನು.
10:24b.LUK.010.024 ಯಾಕಂದರೆ ಅನೇಕ ಪ್ರವಾದಿಗಳೂ ಅರಸರೂ ನೀವು ನೋಡು ವಂಥವುಗಳನ್ನು ನೋಡಬೇಕೆಂದು ಅಪೇಕ್ಷಿಸಿದರೂ ನೋಡಲಿಲ್ಲ ಮತ್ತು ನೀವು ಕೇಳುವಂಥವುಗಳನ್ನು ಕೇಳ ಬೇಕೆಂದು ಅಪೇಕ್ಷಿಸಿದರೂ ಅವರು ಕೇಳಲಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
10:25b.LUK.010.025 ಆಗ ಇಗೋ, ಒಬ್ಬಾನೊಬ್ಬ ನ್ಯಾಯಶಾಸ್ತ್ರಿಯು ಎದ್ದು ನಿಂತು ಆತನನ್ನು ಶೋಧಿಸುವದಕ್ಕಾಗಿ-- ಬೋಧಕನೇ, ನಾನು ನಿತ್ಯಜೀವವನ್ನು ಬಾಧ್ಯವಾಗಿ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಿದನು.
10:26b.LUK.010.026 ಆತನು ಅವನಿಗೆ-- ನ್ಯಾಯಪ್ರಮಾಣದಲ್ಲಿ ಏನು ಬರೆದದೆ? ನೀನು ಹೇಗೆ ಓದುತ್ತೀ ಎಂದು ಕೇಳಿದನು.
10:27b.LUK.010.027 ಅದಕ್ಕೆ ಅವನು ಪ್ರತ್ಯುತ್ತರವಾಗಿ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯ ದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣಮನಸ್ಸಿನಿಂ ದಲೂ ಪ್ರೀತಿಸಬೇಕು; ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಅಂದನು.
10:28b.LUK.010.028 ಆಗ ಆತನು ಅವನಿಗೆ--ನೀನು ಸರಿಯಾಗಿ ಉತ್ತರ ಕೊಟ್ಟಿದ್ದೀ; ಅದರಂತೆಯೇ ಮಾಡು, ಆಗ ನೀನು ಬದುಕುವಿ ಅಂದನು.
10:29b.LUK.010.029 ಆದರೆ ಅವನು ತನ್ನನ್ನು ತಾನೇ ನೀತಿವಂತನೆಂದು ತೋರಿಸು ವದಕ್ಕೆ ಅಪೇಕ್ಷೆಯುಳ್ಳವನಾಗಿ ಯೇಸುವಿಗೆ--ನನ ನೆರೆಯವನು ಯಾರು ಎಂದು ಕೇಳಿದನು.
10:30b.LUK.010.030 ಆಗ ಯೇಸು ಪ್ರತ್ಯುತ್ತರವಾಗಿ--ಒಬ್ಬಾನೊಬ್ಬ ಮನುಷ್ಯನು ಯೆರೂಸಲೇಮಿನಿಂದ ಇಳಿದು ಯೆರಿಕೋವಿಗೆ ಹೋಗುತ್ತಿದ್ದಾಗ ಕಳ್ಳರ ಮಧ್ಯದಲ್ಲಿ ಸಿಕ್ಕಿಬಿದ್ದನು. ಅವರು ಅವನ ಬಟ್ಟೆಯನ್ನು ತೆಗೆದುಹಾಕಿ ಅವನನ್ನು ಗಾಯ ಪಡಿಸಿ ಅರೆಜೀವ ಮಾಡಿ ಬಿಟ್ಟು ಹೊರಟುಹೋದರು.
10:31b.LUK.010.031 ಆಗ ಅನಿರೀಕ್ಷಿತವಾಗಿ ಒಬ್ಬಾನೊಬ್ಬ ಯಾಜಕನು ಆ ಮಾರ್ಗವಾಗಿ ಬಂದು ಅವನನ್ನು ನೋಡಿ ಓರೆ ಯಾಗಿ ಹೋದನು.
10:32b.LUK.010.032 ಅದೇ ಪ್ರಕಾರ ಒಬ್ಬ ಲೇವಿ ಯೂ ಆ ಸ್ಥಳಕ್ಕೆ ಬಂದು ಅವನನ್ನು ನೋಡಿ ಓರೆಯಾಗಿ ಹೋದನು.
10:33b.LUK.010.033 ಆದರೆ ಒಬ್ಬಾನೊಬ್ಬ ಸಮಾರ್ಯದ ವನು ಪ್ರಯಾಣ ಮಾಡುತ್ತಾ ಅವನಿದ್ದಲ್ಲಿಗೆ ಬಂದನು; ಅವನನ್ನು ನೋಡಿ ಅವನ ಮೇಲೆ ಕನಿಕರಪಟು
10:34b.LUK.010.034 ಅವನ ಬಳಿಗೆ ಹೋಗಿ ಎಣ್ಣೆಯನ್ನೂ ದ್ರಾಕ್ಷಾರಸ ವನ್ನೂ ಹೊಯ್ದು ಅವನ ಗಾಯಗಳನ್ನು ಕಟ್ಟಿ ತನ್ನ ಸ್ವಂತ ಪಶುವಿನ ಮೇಲೆ ಕೂಡ್ರಿಸಿ ವಸತಿ ಗೃಹಕ್ಕೆ ತಂದು ಅವನನ್ನು ಆರೈಕೆ ಮಾಡಿದನು.
10:35b.LUK.010.035 ಮರುದಿವಸ ಅವನು ಹೊರಟು ಹೋಗುತ್ತಿದ್ದಾಗ ಎರಡು ನಾಣ್ಯ ಗಳನ್ನು ತೆಗೆದು ವಸತಿಗೃಹದ ಯಜಮಾನನಿಗೆ ಕೊಟ್ಟು ಅವನಿಗೆ--ಇವನನ್ನು ಆರೈಕೆ ಮಾಡು, ನೀನು ಏನಾ ದರೂ ಹೆಚ್ಚು ವೆಚ್ಚ ಮಾಡಿದರೆ ನಾನು ತಿರಿಗಿ ಬಂದಾಗ ಕೊಟ್ಟು ತೀರಿಸುತ್ತೇನೆ ಅಂದನು.
10:36b.LUK.010.036 ಈ ಮೂವರಲ್ಲಿ ಯಾರು ಆ ಕಳ್ಳರ ನಡುವೆ ಸಿಕ್ಕಿ ಬಿದ್ದವನಿಗೆ ನೆರೆಯವ ನಾದನೆಂದು ನೀನು ಯೋಚಿಸುತ್ತೀ ಎಂದು ಕೇಳಿದ್ದಕ್ಕೆ
10:37b.LUK.010.037 ಅವನು-- ಯಾವನು ಅವನ ಮೇಲೆ ಕನಿಕರ ತೋರಿಸಿದನೋ ಅವನೇ ಅಂದನು. ಆಗ ಯೇಸು ಅವನಿಗೆ--ಹೋಗು, ನೀನೂ ಅದರಂತೆಯೇ ಮಾಡು ಎಂದು ಹೇಳಿದನು.
10:38b.LUK.010.038 ಇದಾದ ಮೇಲೆ ಅವರು ಹೋಗುತ್ತಿದ್ದಾಗ ಆತನು ಒಂದಾನೊಂದು ಹಳ್ಳಿಯನ್ನು ಪ್ರವೇಶಿಸಿದನು; ಆಗ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯೊಳಗೆ ಅಂಗೀಕರಿಸಿಕೊಂಡಳು.
10:39b.LUK.010.039 ಆಕೆಗೆ ಮರಿಯಳೆಂಬ ಒಬ್ಬ ಸಹೋದರಿ ಇದ್ದಳು. ಆಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕೂತು ಆತನ ವಾಕ್ಯವನ್ನು ಕೇಳುತ್ತಿದ್ದಳು.
10:40b.LUK.010.040 ಆದರೆ ಮಾರ್ಥಳು ಬಹಳ ಕೆಲಸದ ನಿಮಿತ್ತವಾಗಿ ಬೇಸರಗೊಂಡು ಆತನ ಬಳಿಗೆ ಬಂದು--ಕರ್ತನೇ, ಕೆಲಸ ಮಾಡುವದಕ್ಕೆ ನನ್ನ ಸಹೋದರಿಯು ನನ್ನೊಬ್ಬಳನ್ನೇ ಬಿಟ್ಟಿರುವದು ನಿನಗೆ ಚಿಂತೆಯಿಲ್ಲವೋ? ಆದದರಿಂದ ನನಗೆ ಸಹಾಯಮಾಡುವದಕ್ಕಾಗಿ ಅವಳಿಗೆ ಹೇಳು ಅಂದಳು.
10:41b.LUK.010.041 ಆದರೆ ಯೇಸು ಪ್ರತ್ಯುತ್ತರವಾಗಿ ಆಕೆಗೆ--ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತಿಸಿ ತೊಂದರೆಗೆ ಒಳಗಾಗಿದ್ದೀ;ಆದರೆ ಅವಶ್ಯವಾದದ್ದು ಒಂದೇ; ಮರಿಯಳು ಆ ಒಳ್ಳೇಭಾಗವನ್ನೇ ಆರಿಸಿ ಕೊಂಡಿದ್ದಾಳೆ. ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಅಂದನು.
10:42b.LUK.010.042 ಆದರೆ ಅವಶ್ಯವಾದದ್ದು ಒಂದೇ; ಮರಿಯಳು ಆ ಒಳ್ಳೇಭಾಗವನ್ನೇ ಆರಿಸಿ ಕೊಂಡಿದ್ದಾಳೆ. ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಅಂದನು.
11
11:1b.LUK.011.001 ಇದಾದ ಮೇಲೆ ಆತನು ಒಂದಾನೊಂದು ಸ್ಥಳದಲ್ಲಿ ಪ್ರಾರ್ಥನೆ ಮಾಡಿ ಮುಗಿಸಿದ ಮೇಲೆ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ--ಕರ್ತನೇ, ಯೋಹಾನನು ತನ್ನ ಶಿಷ್ಯರಿಗೆ ಕಲಿಸಿದ ಹಾಗೆಯೇ ನಮಗೂ ಪ್ರಾರ್ಥನೆ ಮಾಡುವದಕ್ಕೆ ಕಲಿಸು ಎಂದು ಕೇಳಲು
11:2b.LUK.011.002 ಆತನು ಅವರಿಗೆ--ನೀವು ಪ್ರಾರ್ಥನೆ ಮಾಡುವಾಗ--ಪರಲೋಕದಲ್ಲಿರುವ ನಮ್ಮ ತಂದೆ ಯೇ, ನಿನ್ನ ನಾಮವು ಪರಿಶುದ್ಧವಾಗಲಿ, ನಿನ್ನ ರಾಜ್ಯವು ಬರಲಿ, ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವಂತೆ ಭೂಮಿಯಲ್ಲಿಯೂ ನೆರವೇರಲಿ.
11:3b.LUK.011.003 ನಮ್ಮ ರೊಟ್ಟಿಯನ್ನು ಪ್ರತಿದಿನವೂ ನಮಗೆ ಕೊಡು.
11:4b.LUK.011.004 ನಮಗೆ ಸಾಲಗಾರ ರಾಗಿರುವ ಪ್ರತಿಯೊಬ್ಬನನ್ನು ಕ್ಷಮಿಸುವಂತೆಯೇ ನಮ್ಮ ಪಾಪಗಳನ್ನು ನಮಗೆ ಕ್ಷಮಿಸು; ನಮ್ಮನ್ನು ಶೋಧನೆ ಯೊಳಗೆ ಸೇರಿಸಬೇಡ; ಆದರೆ ಕೇಡಿನಿಂದ ನಮ್ಮನ್ನು ತಪ್ಪಿಸು ಎಂದು ಹೇಳಿರಿ ಅಂದನು.
11:5b.LUK.011.005 ಆತನು ಅವರಿಗೆ--ನಿಮ್ಮಲ್ಲಿ ಯಾವನಿಗಾದರೂ ಒಬ್ಬ ಸ್ನೇಹಿತನಿರಲಾಗಿ ಮಧ್ಯರಾತ್ರಿಯಲ್ಲಿ ಅವನ ಬಳಿಗೆ ಹೋಗಿ ಅವನಿಗೆ--ಸ್ನೇಹಿತನೇ, ಮೂರು ರೊಟ್ಟಿಗಳನ್ನು ನನಗೆ ಕಡವಾಗಿ ಕೊಡು;
11:6b.LUK.011.006 ನನ್ನ ಸ್ನೇಹಿ ತನು ಪ್ರಯಾಣವಾಗಿ ನನ್ನ ಬಳಿಗೆ ಬಂದಿದ್ದಾನೆ; ಅವನಿಗೆ ಬಡಿಸುವದಕ್ಕೆ ನನ್ನಲ್ಲಿ ಏನೂ ಇಲ್ಲ ಅನ್ನಲು
11:7b.LUK.011.007 ಅವನು ಒಳಗಿನಿಂದಲೇ ಅವನಿಗೆ ಉತ್ತರವಾಗಿ--ನನ್ನನ್ನು ತೊಂದರೆಪಡಿಸಬೇಡ; ಬಾಗಲು ಈಗ ಮುಚ್ಚಿ ಯದೆ, ಹಾಸಿಗೆಯಲ್ಲಿ ನನ್ನ ಮಕ್ಕಳು ನನ್ನ ಜೊತೆಯಲ್ಲಿ ದ್ದಾರೆ; ನಾನೆದ್ದು ಕೊಡಲಾರೆನು ಎಂದು ಹೇಳುವನು.
11:8b.LUK.011.008 ಆದರೆ ನಾನು ನಿಮಗೆ ಹೇಳುವದೇನಂದರೆ--ಅವನು ತನ್ನ ಸ್ನೇಹಿತನಾಗಿರುವದರಿಂದ ಎದ್ದು ಅವನಿಗೆ ಕೊಡದೆ ಹೋದರೂ ಅವನು ಮೇಲಿಂದ ಮೇಲೆ ಪೀಡಿಸಿ ಬೇಡುವದರಿಂದ ಎದ್ದು ಅವನಿಗೆ ಬೇಕಾದಷ್ಟು ಕೊಡುವನು.
11:9b.LUK.011.009 ನಾನು ನಿಮಗೆ ಹೇಳುವದೇನಂ ದರೆ--ಬೇಡಿಕೊಳ್ಳಿರಿ, ನಿಮಗೆ ಕೊಡಲ್ಪಡುವದು; ಹುಡುಕಿರಿ, ನೀವು ಕಂಡುಕೊಳ್ಳುವಿರಿ; ತಟ್ಟಿರಿ, ನಿಮಗೆ ತೆರೆಯಲ್ಪಡುವದು.
11:10b.LUK.011.010 ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು; ಹುಡುಕುವವನು ಕಂಡುಕೊಳ್ಳುವನು; ತಟ್ಟುವವನಿಗೆ ತೆರೆಯಲ್ಪಡುವದು.
11:11b.LUK.011.011 ನಿಮ್ಮಲ್ಲಿ ತಂದೆ ಯಾಗಿರುವ ಯಾವನಾದರೂ ತನ್ನ ಮಗನು ರೊಟ್ಟಿ ಕೇಳಿದರೆ ಅವನಿಗೆ ಕಲ್ಲನ್ನು ಕೊಡುವನೇ? ಇಲ್ಲವೆ ವಿಾನನ್ನು ಕೇಳಿದರೆ ವಿಾನಿಗೆ ಬದಲಾಗಿ ಅವನಿಗೆ ಹಾವನ್ನು ಕೊಡುವನೇ?
11:12b.LUK.011.012 ಇಲ್ಲವೆ ಅವನು ಮೊಟ್ಟೆ ಯನ್ನು ಕೇಳಿದರೆ ಅವನಿಗೆ ಚೇಳನ್ನು ಕೊಡುವನೇ?
11:13b.LUK.011.013 ಹಾಗಾದರೆ ಕೆಟ್ಟವರಾಗಿರುವ ನೀವು ನಿಮ್ಮ ಮಕ್ಕಳಿಗೆ ಒಳ್ಳೇದಾನಗಳನ್ನು ಕೊಡುವದು ಹೇಗೆಂಬದನ್ನು ತಿಳಿ ದವರಾಗಿದ್ದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಎಷ್ಟೋ ಹೆಚ್ಚಾಗಿ ತನ್ನನ್ನು ಬೇಡಿಕೊಳ್ಳುವವರಿಗೆ ಪವಿ ತ್ರಾತ್ಮನನ್ನು ದಯಪಾಲಿಸುವನಲ್ಲವೇ?
11:14b.LUK.011.014 ತರುವಾಯ ಆತನು ಒಂದು ಮೂಕದೆವ್ವವನ್ನು ಹೊರಡಿಸುತ್ತಿರುವಾಗ ಆದದ್ದೇನಂದರೆ, ಆ ದೆವ್ವವು ಹೊರಟು ಹೋದ ಮೇಲೆ ಆ ಮೂಕನು ಮಾತನಾಡಿ ದನು; ಅದಕ್ಕೆ ಜನರು ಆಶ್ಚರ್ಯಪಟ್ಟರು.
11:15b.LUK.011.015 ಆದರೆ ಅವರಲ್ಲಿ ಕೆಲವರು--ದೆವ್ವಗಳ ಅಧಿಪತಿಯಾದ ಬೆಲ್ಜೆ ಬೂಲನಿಂದ ಅವನು ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
11:16b.LUK.011.016 ಬೇರೆಯವರು ಆತನನ್ನು ಶೋಧಿಸುವವ ರಾಗಿ ಆಕಾಶದಿಂದ ಒಂದು ಸೂಚಕ ಕಾರ್ಯವನ್ನು ತೋರಿಸುವಂತೆ ಆತನನ್ನು ಕೇಳಿದರು.
11:17b.LUK.011.017 ಆದರೆ ಆತನು ಅವರ ಅಲೋಚನೆಗಳನ್ನು ತಿಳಿದವನಾಗಿ ಅವರಿಗೆ--ತನ್ನಲ್ಲಿ ವಿರೋಧವಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ರಾಜ್ಯವು ಹಾಳಾಗುವದು; ಒಂದು ಮನೆಯು ತನಗೆ ವಿರೋಧವಾಗಿ ವಿಭಾಗಿಸಲ್ಪಟ್ಟರೆ ಅದು ಬಿದ್ದು ಹೋಗುವದು.
11:18b.LUK.011.018 ಸೈತಾನನು ಸಹ ತನಗೆ ವಿರೋಧವಾಗಿ ತನ್ನಲ್ಲಿ ವಿಭಾಗಿಸಲ್ಪಟ್ಟರೆ ಅವನ ರಾಜ್ಯವು ನಿಲ್ಲುವದು ಹೇಗೆ? ಯಾಕಂದರೆ ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಹೊರಡಿಸುತ್ತೇನೆಂದು ನೀವು ಹೇಳುತ್ತೀರಲ್ಲಾ.
11:19b.LUK.011.019 ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಬಿಡಿಸುವದಾದರೆ ನಿಮ್ಮ ಪುತ್ರರು ಯಾರಿಂದ ಅವುಗಳನ್ನು ಬಿಡಿಸುತ್ತಾರೆ? ಆದದರಿಂದ ಅವರೇ ನಿಮಗೆ ನ್ಯಾಯ ತೀರಿಸುವವರಾಗಿರುವರು.
11:20b.LUK.011.020 ಆದರೆ ನಾನು ದೇವರ ಹಸ್ತದಿಂದಲೇ ದೆವ್ವಗಳನ್ನು ಹೊರಡಿಸುವದಾದರೆ ದೇವರ ರಾಜ್ಯವು ನಿಸ್ಸಂದೇಹವಾಗಿ ನಿಮ್ಮ ಬಳಿಗೆ ಬಂದಿದೆಯಲ್ಲಾ.
11:21b.LUK.011.021 ಆಯುಧ ಗಳನ್ನು ಧರಿಸಿಕೊಂಡು ಬಲಿಷ್ಠನಾದವನೊಬ್ಬನು ತನ್ನ ಅರಮನೆಯನ್ನು ಕಾಯುವದಾದರೆ ಅವನ ಸೊತ್ತು ಸುರಕ್ಷಿತವಾಗಿರುವದು.
11:22b.LUK.011.022 ಆದರೆ ಅವನಿಗಿಂತ ಬಲಿ ಷ್ಠನು ಅವನ ಮೇಲೆ ಬಂದು ಅವನನ್ನು ಜಯಿಸಿ ಅವನು ನಂಬಿಕೊಂಡಿದ್ದ ಆಯುಧಗಳನ್ನು ಅವನಿಂದ ತಕ್ಕೊಂಡು ತನ್ನ ಸುಲಿಗೆಗಳನ್ನು ಹಂಚುವನು.
11:23b.LUK.011.023 ನನ್ನ ಜೊತೆಯಲ್ಲಿ ಇಲ್ಲದಿರುವವನು ನನಗೆ ವಿರೋಧವಾಗಿ ದ್ದಾನೆ; ನನ್ನೊಂದಿಗೆ ಕೂಡಿಸದೆ ಇರುವವನು ಚದರಿ ಸುತ್ತಾನೆ.
11:24b.LUK.011.024 ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದಮೇಲೆ ನೀರಿಲ್ಲದ ಸ್ಥಳಗಳಲ್ಲಿ ತಿರು ಗುತ್ತಾ ವಿಶ್ರಾಂತಿಯನ್ನು ಹುಡುಕಿ ಏನೂ ಕಾಣದೆ ಅದು--ನಾನು ಹೊರಟು ಬಂದ ನನ್ನ ಮನೆಗೆ ಹಿಂದಿ ರುಗುವೆನು ಎಂದು ಅಂದುಕೊಳ್ಳುತ್ತದೆ.
11:25b.LUK.011.025 ಅದು ಬಂದು ಆ ಮನೆಯು ಗುಡಿಸಿ ಅಲಂಕರಿಸಿದ್ದನ್ನು ಕಂಡಿತು.
11:26b.LUK.011.026 ಆಗ ಅದು ಹೋಗಿ ತನಗಿಂತಲೂ ಕೆಟ್ಟವು ಗಳಾದ ಬೇರೆ ಏಳು ದುರಾತ್ಮಗಳನ್ನು ತನ್ನೊಂದಿಗೆ ಕರಕೊಂಡು ಒಳಗೆ ಸೇರಿ ಅಲ್ಲಿ ವಾಸಮಾಡುವವು; ಮತ್ತು ಆ ಮನುಷ್ಯನ ಕಡೇ ಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವದು ಅಂದನು.
11:27b.LUK.011.027 ಇದಾದ ಮೇಲೆ ಆತನು ಇವುಗಳನ್ನು ಹೇಳು ತ್ತಿದ್ದಾಗ ಆ ಗುಂಪಿನಲ್ಲಿದ್ದ ಒಬ್ಬ ಸ್ತ್ರೀಯು ತನ್ನ ಸ್ವರವನ್ನು ಎತ್ತಿ ಆತನಿಗೆ--ನಿನ್ನನ್ನು ಹೊತ್ತ ಗರ್ಭವೂ ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು ಎಂದು ಹೇಳಿದಳು.
11:28b.LUK.011.028 ಆದರೆ ಆತನು--ಹೌದು, ಇದಕ್ಕಿಂ ತಲೂ ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯು ವವರೇ ಧನ್ಯರು ಎಂದು ಹೇಳಿದನು.
11:29b.LUK.011.029 ಜನರು ಗುಂಪುಗುಂಪಾಗಿ ಕೂಡಿ ಬಂದಿದ್ದಾಗ ಆತನು--ಇದು ದುಷ್ಟಸಂತತಿಯು; ಇದು ಸೂಚಕ ಕಾರ್ಯವನ್ನು ಹುಡುಕುತ್ತದೆ. ಪ್ರವಾದಿಯಾದ ಯೋನ ನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಕೊಡಲ್ಪಡ ಲಾರದು.
11:30b.LUK.011.030 ಯೋನನು ನಿನೆವೆಯವರಿಗೆ ಸೂಚನೆ ಯಾಗಿದ್ದಂತೆಯೇ ಮನುಷ್ಯಕುಮಾರನು ಸಹ ಈ ಸಂತತಿಗೆ ಸೂಚನೆಯಾಗಿರುವನು.
11:31b.LUK.011.031 ನ್ಯಾಯ ತೀರ್ಪಿ ನಲ್ಲಿ ದಕ್ಷಿಣದ ರಾಣಿಯು ಈ ಸಂತತಿ ಯವರೊಂದಿಗೆ ಎದ್ದು ಇವರನ್ನು ಖಂಡಿಸುವಳು; ಯಾಕಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವದಕ್ಕೆ ಭೂಮಿಯ ಕಟ್ಟಕಡೆಯ ಭಾಗಗಳಿಂದ ಬಂದಳು; ಮತ್ತು ಇಗೋ, ಸೊಲೊಮೋನನಿಗಿಂತಲೂ ಹೆಚ್ಚಿನವನು ಇಲ್ಲಿದ್ದಾನೆ.
11:32b.LUK.011.032 ನಿನೆವೆಯವರು ನ್ಯಾಯತೀರ್ಪಿನಲ್ಲಿ ಈ ಸಂತತಿಯವ ರೊಂದಿಗೆ ಎದ್ದು ಇದನ್ನು ಖಂಡಿಸುವರು. ಯಾಕಂದರೆ ಯೋನನು ಸಾರಿದ್ದನ್ನು ಕೇಳಿ ಅವರು ಮಾನಸಾಂತರ ಪಟ್ಟರು; ಮತ್ತು ಇಗೋ, ಯೋನನಿಗಿಂತಲೂ ಹೆಚ್ಚಿನ ವನು ಇಲ್ಲಿದ್ದಾನೆ.
11:33b.LUK.011.033 ಯಾರೂ ದೀಪವನ್ನು ಹಚ್ಚಿ ಗುಪ್ತ ಸ್ಥಳದಲ್ಲಾಗಲಿ ಇಲ್ಲವೆ ಕೊಳಗದೊಳಗಾಗಲಿ ಇಡುವದಿಲ್ಲ; ಆದರೆ ಒಳಗೆ ಬರುವವರು ಬೆಳಕನ್ನು ನೋಡುವಂತೆ ಅದನ್ನು ದೀಪಸ್ತಂಭದ ಮೇಲೆ ಇಡು ತ್ತಾರಷ್ಟೆ.
11:34b.LUK.011.034 ಕಣ್ಣು ಶರೀರದ ಬೆಳಕಾಗಿದೆ; ಆದದರಿಂದ ನಿನ್ನ ಕಣ್ಣು ಶುದ್ಧವಾಗಿದ್ದರೆ ನಿನ್ನ ಶರೀರವೆಲ್ಲವು ತುಂಬಾ ಬೆಳಕಾಗಿರುತ್ತದೆ; ಅದು ಕೆಟ್ಟದ್ದಾಗಿದ್ದರೆ ನಿನ್ನ ಶರೀರವು ಸಹ ಕತ್ತಲೆಯಿಂದ ತುಂಬಿರುವದು.
11:35b.LUK.011.035 ಆದದರಿಂದ ನಿನ್ನಲ್ಲಿರುವ ಬೆಳಕು ಕತ್ತಲೆಯಾಗದಂತೆ ನೋಡಿಕೋ;
11:36b.LUK.011.036 ಆದಕಾರಣ ಯಾವ ಭಾಗದಲ್ಲಿಯೂ ಕತ್ತಲೆಯಾಗಿ ರದೆ ನಿನ್ನ ಶರೀರವೆಲ್ಲವೂ ಪೂರ್ಣವಾಗಿ ಬೆಳಕಾಗಿರುವ ದಾದರೆ ಪ್ರಕಾಶಮಾನವಾದ ದೀಪವು ನಿನಗೆ ಬೆಳಕು ಕೊಡುವ ಪ್ರಕಾರ ಸಮಸ್ತವೂ ಬೆಳಕಾಗಿರುವದು ಎಂದು ಹೇಳಿದನು.
11:37b.LUK.011.037 ಆತನು ಮಾತನಾಡುತ್ತಿದ್ದಾಗ ಒಬ್ಬಾನೊಬ್ಬ ಫರಿಸಾಯನು ತನ್ನೊಂದಿಗೆ ಊಟಮಾಡಬೇಕೆಂದು ಆತನನ್ನು ಬೇಡಿಕೊಂಡನು. ಆಗ ಆತನು ಒಳಗೆ ಹೋಗಿ ಊಟಕ್ಕೆ ಕೂತುಕೊಂಡನು.
11:38b.LUK.011.038 ಆದರೆ ಊಟಕ್ಕೆ ಮೊದಲು ಆತನು ಕೈತೊಳಕೊಳ್ಳದೆ ಇರುವದನ್ನು ಫರಿಸಾಯನು ಕಂಡು ಆಶ್ಚರ್ಯಪಟ್ಟನು.
11:39b.LUK.011.039 ಆಗ ಕರ್ತನು ಅವನಿಗೆ-- ಫರಿಸಾಯರಾದ ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ; ಆದರೆ ನಿಮ್ಮ ಒಳಭಾಗವು ಸುಲಿಗೆಯಿಂದಲೂ ಕೆಟ್ಟತನ ದಿಂದಲೂ ತುಂಬಿರುತ್ತದೆ
11:40b.LUK.011.040 ಮೂರ್ಖರೇ, ಹೊರ ಭಾಗವನ್ನು ಮಾಡಿದಾತನು ಒಳಭಾಗವನ್ನು ಸಹ ಮಾಡಿದನಲ್ಲವೇ?
11:41b.LUK.011.041 ಆದರೆ ನಿಮಗೆ ಇರುವವುಗಳಲ್ಲಿ ನೀವು ದಾನಾಕೊಡಿರಿ; ಆಗ ಇಗೋ, ನಿಮಗೆ ಎಲ್ಲವು ಗಳು ಶುದ್ಧವಾಗಿರುವವು.
11:42b.LUK.011.042 ಆದರೆ ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಮರುಗಪತ್ರೆ ಸದಾಪು ಸಕಲ ವಿಧವಾದ ಸೊಪ್ಪುಗಳಲ್ಲಿ ದಶಮಭಾಗವನ್ನು ಕೊಟ್ಟು ನ್ಯಾಯತೀರ್ಪನ್ನೂ ದೇವರಪ್ರೀತಿಯನ್ನೂ ಲಕ್ಷಿಸದೆ ಹೋಗುತ್ತೀರಿ. ಇವುಗಳನ್ನು ತಪ್ಪದೆ ಮಾಡಿ ಬೇರೆಯವು ಗಳನ್ನು ಬಿಡದೆ ಮಾಡಬೇಕಾಗಿತ್ತು.
11:43b.LUK.011.043 ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಸಭಾಮಂದಿರ ಗಳಲ್ಲಿ ಅತ್ಯುನ್ನತ ಸ್ಥಾನಗಳನ್ನೂ ಸಂತೆಗಳಲ್ಲಿ ವಂದನೆಗಳನ್ನೂ ಪ್ರೀತಿಸುತ್ತೀರಿ.
11:44b.LUK.011.044 ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೊ! ಯಾಕಂದರೆ ನೀವು ಕಾಣಿಸದ ಸಮಾಧಿಗಳಂತೆ ಇದ್ದೀರಿ; ಅವುಗಳ ಮೇಲೆ ನಡೆದಾಡುವ ಮನುಷ್ಯರು ಅವುಗಳನ್ನು ಅರಿಯರು ಎಂದು ಹೇಳಿದನು.
11:45b.LUK.011.045 ಆಗ ನ್ಯಾಯಶಾಸ್ತ್ರಿಗಳಲ್ಲಿ ಒಬ್ಬನು ಆತನಿಗೆ-- ಬೋಧಕನೇ, ನೀನು ಇವುಗಳನ್ನು ಹೇಳುವದರಿಂದ ನಮ್ಮನ್ನು ಸಹ ಅವಮಾನಪಡಿಸುತ್ತೀ ಅಂದನು.
11:46b.LUK.011.046 ಅದಕ್ಕೆ ಆತನು--ನ್ಯಾಯಶಾಸ್ತ್ರಿಗಳಾದ ನಿಮಗೂ ಅಯ್ಯೋ! ಯಾಕಂದರೆ ಹೊರಲು ಕಠಿಣವಾದ ಹೊರೆ ಗಳನ್ನು ಮನುಷ್ಯರ ಮೇಲೆ ಹೊರಿಸಿ ನಿಮ್ಮ ಬೆರಳುಗಳಲ್ಲಿ ಒಂದರಿಂದಾದರೂ ನೀವು ಆ ಹೊರೆಗಳನ್ನು ಮುಟ್ಟು ವದಿಲ್ಲ.
11:47b.LUK.011.047 ನಿಮಗೆ ಅಯ್ಯೋ! ಯಾಕಂದರೆ ನಿಮ್ಮ ತಂದೆಗಳು ಪ್ರವಾದಿಗಳನ್ನು ಕೊಂದರು. ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ.
11:48b.LUK.011.048 ಇದರಿಂದ ನಿಜವಾ ಗಿಯೂ ನಿಮ್ಮ ತಂದೆಗಳ ಕೃತ್ಯಗಳನ್ನು ನೀವು ಒಪ್ಪಿ ಕೊಳ್ಳುವಂತೆ ಸಾಕ್ಷೀಕರಿಸುತ್ತೀರಿ; ಯಾಕಂದರೆ ಅವರು ನಿಜವಾಗಿಯೂ ಅವರನ್ನು ಕೊಂದರು; ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ.
11:49b.LUK.011.049 ಆದದರಿಂದ ದೇವರ ಜ್ಞಾನವು ಸಹ ಹೇಳಿದ್ದೇನಂದರೆ -- ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸು ವೆನು; ಅವರಲ್ಲಿ ಕೆಲವರನ್ನು ಅವರು ಕೊಲ್ಲುವರು ಮತ್ತು ಹಿಂಸಿಸುವರು.
11:50b.LUK.011.050 ಹೀಗೆ ಜಗತ್ತಿನ ಅಸ್ತಿವಾರ ಮೊದಲುಗೊಂಡು ಸುರಿಸಲ್ಪಟ್ಟ ಎಲ್ಲಾ ಪ್ರವಾದಿಗಳ ರಕ್ತಕ್ಕೆ ಈ ಸಂತತಿಯು ಉತ್ತರ ಕೊಡಬೇಕಾಗಿರುವದು.
11:51b.LUK.011.051 ಹೇಬೆಲನ ರಕ್ತ ಮೊದಲುಗೊಂಡು ಯಜ್ಞವೇದಿಗೂ ದೇವಾಲಯಕ್ಕೂ ಮಧ್ಯದಲ್ಲಿ ಹತವಾದ ಜಕರೀಯನ ರಕ್ತದವರೆಗೂ ಈ ಸಂತತಿಯು ಉತ್ತರಕೊಡಬೇಕು; ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
11:52b.LUK.011.052 ನ್ಯಾಯ ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಯಾಕಂದರೆ ನೀವು ಜ್ಞಾನದ ಬೀಗದ ಕೈಯನ್ನು ತಕ್ಕೊಂಡಿದ್ದೀರಿ, ನೀವಂತೂ ಒಳಗೆ ಪ್ರವೇಶಿಸಲಿಲ್ಲ. ಒಳಗೆ ಪ್ರವೇಶಿಸುತ್ತಿರುವವ ರಿಗೂ ನೀವು ತಡೆದಿರಿ ಎಂದು ಹೇಳಿದನು.
11:53b.LUK.011.053 ಆತನು ಅವರಿಗೆ ಈ ವಿಷಯಗಳನ್ನು ಹೇಳು ತ್ತಿದ್ದಾಗ ಶಾಸ್ತ್ರಿಗಳು ಮತ್ತು ಫರಿಸಾಯರು ಕೋಪಾವೇಶ ವುಳ್ಳವರಾಗಿ ಆತನು ಇನ್ನೂ ಅನೇಕವಾದವುಗಳ ವಿಷಯವಾಗಿ ಮಾತನಾಡುವಂತೆ ಆತನನ್ನು ಉದ್ರೇಕ ಗೊಳಿಸಲಾರಂಭಿಸಿದರು.ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು.
11:54b.LUK.011.054 ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು.
12
12:1b.LUK.012.001 ಅಷ್ಟರಲ್ಲಿ ಅಸಂಖ್ಯವಾದ ಜನಸಮೂಹವು ಒಬ್ಬರ ಮೇಲೊಬ್ಬರು ತುಳಿದಾಡುವಷ್ಟು ಒಟ್ಟುಗೂಡಿ ಬಂದಿರಲಾಗಿ ಆತನು ಎಲ್ಲಾದಕ್ಕಿಂತ ಮೊದಲು ತನ್ನ ಶಿಷ್ಯರಿಗೆ--ಫರಿಸಾಯರ ಕಪಟವೆಂಬ ಹುಳಿಯ ವಿಷಯದಲ್ಲಿ ನೀವು ಎಚ್ಚರವಾಗಿರ್ರಿ.
12:2b.LUK.012.002 ಪ್ರಕಟವಾಗದಂತೆ ಯಾವದೂ ಮರೆಯಾಗಿರು ವದಿಲ್ಲ; ಇಲ್ಲವೆ ತಿಳಿಯುವದಕ್ಕಾಗದಂತೆ ಯಾವದೂ ಗುಪ್ತವಾಗಿರುವದಿಲ್ಲ.
12:3b.LUK.012.003 ಆದದರಿಂದ ನೀವು ಕತ್ತಲೆಯಲ್ಲಿ ಯಾವದನ್ನು ಮಾತನಾಡಿದ್ದೀರೋ ಅದು ಬೆಳಕಿನಲ್ಲಿ ಕೇಳಲ್ಪಡುವದು; ಕೋಣೆಗಳೊಳಗೆ ನೀವು ಕಿವಿಯಲ್ಲಿ ಮಾತನಾಡಿದ್ದು ಮಾಳಿಗೆಗಳ ಮೇಲೆ ಪ್ರಕಟಿಸ ಲ್ಪಡುವದು ಎಂದು ಹೇಳಲಾರಂಭಿಸಿದನು.
12:4b.LUK.012.004 ನನ್ನ ಸ್ನೇಹಿತರಾದ ನಿಮಗೆ ನಾನು ಹೇಳುವದೇನಂದರೆ--ದೇಹವನ್ನು ಕೊಂದು ಅದಕ್ಕಿಂತ ಹೆಚ್ಚೇನೂ ಮಾಡಲಾರ ದವರಿಗೆ ಹೆದರಬೇಡಿರಿ.
12:5b.LUK.012.005 ಆದರೆ ಯಾರಿಗೆ ನೀವು ಭಯಪಡಬೇಕೆಂದು ಮುಂದಾಗಿ ನಾನು ನಿಮ್ಮನ್ನು ಎಚ್ಚರಿಸುತ್ತೇನೆ; ಕೊಂದಮೇಲೆ ನರಕದಲ್ಲಿ ಹಾಕುವದಕ್ಕೆ ಅಧಿಕಾರವಿರುವಾತನಿಗೇ ಭಯಪಡಿರಿ; ಹೌದು, ಆತನಿಗೆ ಭಯಪಡಿರಿ ಎಂದು ನಾನು ನಿಮಗೆ ಹೇಳುತ್ತೇನೆ.
12:6b.LUK.012.006 ಎರಡು ಕಾಸುಗಳಿಗೆ ಐದು ಗುಬ್ಬಿಗಳು ಮಾರಲ್ಪಡುತ್ತವಲ್ಲಾ? ಅವುಗಳಲ್ಲಿ ಒಂದಾದರೂ ದೇವರ ಮುಂದೆ ಮರೆತುಹೋಗುವದಿಲ್ಲ.
12:7b.LUK.012.007 ನಿಮ್ಮ ತಲೆಯ ಕೂದಲುಗಳು ಸಹ ಲೆಕ್ಕಿಸಲ್ಪಟ್ಟಿವೆ. ಆದದರಿಂದ ಭಯಪಡಬೇಡಿರಿ; ನೀವು ಬಹಳ ಗುಬ್ಬಿಗಳಿಗಿಂತಲೂ ಹೆಚ್ಚು ಬೆಲೆಯುಳ್ಳವರಾಗಿದ್ದೀರಿ.
12:8b.LUK.012.008 ಇದಲ್ಲದೆ ನಾನೂ ನಿಮಗೆ ಹೇಳುವದೇನಂದರೆ--ಯಾವನಾದರೂ ಮನು ಷ್ಯರ ಮುಂದೆ ನನ್ನನ್ನು ಒಪ್ಪಿಕೊಂಡರೆ ಮನುಷ್ಯ ಕುಮಾರನು ಸಹ ದೇವದೂತರ ಮುಂದೆ ಅವನನ್ನು ಒಪ್ಪಿಕೊಳ್ಳುವನು.
12:9b.LUK.012.009 ಆದರೆ ಯಾವನು ಮನುಷ್ಯರ ಮುಂದೆ ನನ್ನನ್ನು ಅಲ್ಲಗಳೆಯುವನೋ ಅವನು ದೇವದೂತರ ಮುಂದೆ ಅಲ್ಲಗಳೆಯಲ್ಪಡುವನು.
12:10b.LUK.012.010 ಯಾವನಾದರೂ ಮನುಷ್ಯಕುಮಾರನಿಗೆ ವಿರೋಧ ವಾಗಿ ಮಾತನಾಡಿದರೆ ಅದು ಅವನಿಗೆ ಕ್ಷಮಿಸ ಲ್ಪಡುವದು; ಆದರೆ ಪರಿಶುದ್ಧಾತ್ಮನಿಗೆ ವಿರೋಧವಾಗಿ ದೂಷಣೆ ಮಾಡಿದರೆ ಅದು ಅವನಿಗೆ ಕ್ಷಮಿಸಲ್ಪ ಡುವದಿಲ್ಲ.
12:11b.LUK.012.011 ಅವರು ನಿಮ್ಮನ್ನು ಸಭಾ ಮಂದಿರಗಳಿಗೂ ನ್ಯಾಯಾಧಿಪತಿಗಳ ಮುಂದೆಯೂ ಅಧಿಕಾರಿಗಳ ಮುಂದೆಯೂ ತಂದಾಗ ಹೇಗೆ ಇಲ್ಲವೆ ಯಾವದನ್ನು ಉತ್ತರಕೊಡಬೇಕೆಂದು ಇಲ್ಲವೆ ಏನು ಹೇಳಬೇಕೆಂದು ಯೋಚಿಸಬೇಡಿರಿ.
12:12b.LUK.012.012 ಯಾಕಂದರೆ ಅದೇ ಗಳಿಗೆಯಲ್ಲಿ ನೀವು ಹೇಳಬೇಕಾದದ್ದನ್ನು ಪರಿಶುದ್ಧಾತ್ಮನು ನಿಮಗೆ ಕಲಿಸುವನು ಅಂದನು.
12:13b.LUK.012.013 ಆಗ ಗುಂಪಿನಲ್ಲಿದ್ದ ಒಬ್ಬನು ಆತನಿಗೆ--ಬೋಧ ಕನೇ, ಆಸ್ತಿಯನ್ನು ಪಾಲುಮಾಡಿ ನನಗೆ ಕೊಡುವಂತೆ ನನ್ನ ಸಹೋದರನಿಗೆ ಹೇಳು ಅಂದನು.
12:14b.LUK.012.014 ಅದಕ್ಕೆ ಆತನು ಅವನಿಗೆ--ಮನುಷ್ಯನೇ, ನಿಮ್ಮ ಮೇಲೆ ನ್ಯಾಯಾಧಿಪತಿಯನ್ನಾಗಿ ಇಲ್ಲವೆ ಪಾಲುಮಾಡುವ ವನನ್ನಾಗಿ ನನ್ನನ್ನು ಯಾರು ಮಾಡಿದರು ಎಂದು ಕೇಳಿದನು.
12:15b.LUK.012.015 ಇದಲ್ಲದೆ ಆತನು ಅವರಿಗೆ--ಜಾಗ್ರತೆ ಯಾಗಿದ್ದು ಲೋಭಕ್ಕೆ ಎಚ್ಚರಿಕೆಯಾಗಿರ್ರಿ; ಯಾಕಂದರೆ ಒಬ್ಬ ಮನುಷ್ಯನಿಗೆ ಸಮೃದ್ಧಿಯಾದ ಆಸ್ತಿಯು ಅವನಿಗೆ ಜೀವಾಧಾರವಲ್ಲ ಅಂದನು.
12:16b.LUK.012.016 ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದ್ದೇನಂದರೆ--ಒಬ್ಬಾ ನೊಬ್ಬ ಐಶ್ವರ್ಯವಂತನ ಭೂಮಿಯು ಸಮೃದ್ಧಿಯಾಗಿ ಬೆಳೆಯಿತು.
12:17b.LUK.012.017 ಆಗ ಅವನು ತನ್ನೊಳಗೆ--ನಾನೇನು ಮಾಡಲಿ? ನನಗಿರುವ ಬೆಳೆಯನ್ನು ತುಂಬಿಡುವದಕ್ಕೆ ನನಗೆ ಸ್ಥಳವಿಲ್ಲ ಎಂದು ಆಲೋಚಿಸಿ ಅವನು--
12:18b.LUK.012.018 ನಾನು ಹೀಗೆ ಮಾಡುತ್ತೇನೆ; ನನ್ನ ಕಣಜಗಳನ್ನು ಕೆಡವಿ ದೊಡ್ಡವನ್ನಾಗಿ ಕಟ್ಟಿಸುತ್ತೇನೆ; ಅಲ್ಲಿ ನನ್ನ ಎಲ್ಲಾ ಬೆಳೆಯನ್ನೂ ನನ್ನ ಸರಕುಗಳನ್ನೂ ಕೂಡಿಸಿಟು
12:19b.LUK.012.019 ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು.
12:20b.LUK.012.020 ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು.
12:21b.LUK.012.021 ತನಗೋಸ್ಕರ ಸಂಪತ್ತನ್ನು ಕೂಡಿಸಿಟ್ಟು ಕೊಂಡು ದೇವರ ಕಡೆಗೆ ಐಶ್ವರ್ಯವಂತನಾಗ ದಿರುವವನು ಇವನಂತೆಯೇ ಇರುವನು ಅಂದನು.
12:22b.LUK.012.022 ಆತನು ತನ್ನ ಶಿಷ್ಯರಿಗೆ--ನೀವು ನಿಮ್ಮ ಪ್ರಾಣಕ್ಕೆ ಏನು ತಿನ್ನಬೇಕು ಇಲ್ಲವೆ ನಿಮ್ಮ ದೇಹಕ್ಕೆ ಏನು ಹೊದ್ದು ಕೊಳ್ಳಬೇಕು ಎಂದು ಚಿಂತೆ ಮಾಡಬೇಡಿರಿ ಎಂದು ನಾನು ನಿಮಗೆ ಹೇಳುತ್ತೇನೆ.
12:23b.LUK.012.023 ಊಟಕ್ಕಿಂತ ಪ್ರಾಣವೂ ವಸ್ತ್ರಕ್ಕಿಂತ ದೇಹವೂ ಹೆಚ್ಚಿನದು.
12:24b.LUK.012.024 ಕಾಗೆಗಳನ್ನು ಗಮನಿಸಿರಿ; ಅವು ಬಿತ್ತುವದಿಲ್ಲ, ಕೊಯ್ಯುವದಿಲ್ಲ; ಅವುಗಳಿಗೆ ಉಗ್ರಾಣವಾಗಲೀ ಕಣಜವಾಗಲೀ ಇಲ್ಲ; ಆದಾಗ್ಯೂ ದೇವರು ಅವುಗಳಿಗೆ ಆಹಾರ ಕೊಡುತ್ತಾನೆ; ನೀವು ಪಕ್ಷಿಗಳಿಗಿಂತ ಎಷ್ಟೋ ಹೆಚ್ಚಿನವರಾಗಿದ್ದೀರಲ್ಲಾ.
12:25b.LUK.012.025 ನಿಮ್ಮಲ್ಲಿ ಯಾವನು ಚಿಂತೆ ಮಾಡಿ ತನ್ನ ನೀಳಕ್ಕೆ ಒಂದು ಮೊಳವನ್ನು ಕೂಡಿಸಿ ಯಾನು?
12:26b.LUK.012.026 ಹಾಗಾದರೆ ಅತ್ಯಲ್ಪವಾಗಿರುವದನ್ನು ನೀವು ಮಾಡಲಾರದವರಾಗಿದ್ದರೆ ಉಳಿದವುಗಳಿಗೋಸ್ಕರ ನೀವು ಚಿಂತೆಮಾಡುವದೇನು?
12:27b.LUK.012.027 ಹೂವುಗಳು ಹೇಗೆ ಬೆಳೆಯುತ್ತವೆ ಯೋಚಿಸಿರಿ; ಅವು ಕಷ್ಟಪಡು ವದಿಲ್ಲ, ನೂಲುವದಿಲ್ಲ; ಆದಾಗ್ಯೂ ಸೊಲೊಮೋ ನನು ತನ್ನ ಎಲ್ಲಾ ವೈಭವದಲ್ಲಿ ಸಹ ಇವುಗಳಲ್ಲಿ ಒಂದರಂತೆಯಾದರೂ ಧರಿಸಿರಲಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ.
12:28b.LUK.012.028 ಓ ಅಲ್ಪ ವಿಶ್ವಾಸಿಗಳೇ, ಹಾಗಾದರೆ ಈಹೊತ್ತು ಹೊಲದಲ್ಲಿದ್ದು ನಾಳೆ ಒಲೆಯಲ್ಲಿ ಹಾಕಲ್ಪಡುವ ಹುಲ್ಲಿಗೆ ದೇವರು ಈ ಪ್ರಕಾರ ಉಡಿಸಿದರೆ ನಿಮಗೆ ಎಷ್ಟೋ ಹೆಚ್ಚಾಗಿ ಉಡಿಸುವನಲ್ಲವೇ?
12:29b.LUK.012.029 ನೀವು ಏನು ತಿನ್ನಬೇಕು ಇಲ್ಲವೆ ನೀವು ಏನು ಕುಡಿಯಬೇಕು ಎಂದು ತವಕಪಡಬೇಡಿರಿ; ನೀವು ಅನುಮಾನದ ಮನಸ್ಸಿನವ ರಾಗಿರಬೇಡಿರಿ.
12:30b.LUK.012.030 ಯಾಕಂದರೆ ಇವೆಲ್ಲವುಗಳಿಗಾಗಿ ಲೋಕದ ಜನಾಂಗಗಳು ಬಹಳವಾಗಿ ತವಕಪಡುತ್ತಾರೆ; ಆದರೆ ಇವುಗಳು ನಿಮಗೆ ಅಗತ್ಯವೆಂದು ನಿಮ್ಮ ತಂದೆಯು ಬಲ್ಲನು.
12:31b.LUK.012.031 ಆದರೆ ನೀವು ದೇವರ ರಾಜ್ಯವನ್ನೇ ಹುಡುಕಿರಿ. ಆಗ ಇವೆಲ್ಲವುಗಳು ನಿಮಗೆ ಕೂಡಿಸಲ್ಪಡುವವು.
12:32b.LUK.012.032 ಚಿಕ್ಕ ಹಿಂಡೇ, ಭಯಪಡಬೇಡ; ಯಾಕಂದರೆ ನಿಮಗೆ ರಾಜ್ಯವನ್ನು ಕೊಡುವದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.
12:33b.LUK.012.033 ನಿಮಗಿರು ವದನ್ನು ಮಾರಿ ದಾನಮಾಡಿರಿ; ನಿಮಗೋಸ್ಕರ ಹಳೇದಾಗದಂಥ ಚೀಲಗಳನ್ನೂ ಅಳಿದುಹೋಗದಂಥ ಸಂಪತ್ತನ್ನೂ ಪರಲೋಕದಲ್ಲಿ ಮಾಡಿಕೊಳ್ಳಿರಿ; ಅಲ್ಲಿ ಕಳ್ಳನು ಸವಿಾಪಕ್ಕೆ ಬರುವದಿಲ್ಲ, ನುಸಿಯು ಕೆಡಿಸು ವದಿಲ್ಲ.
12:34b.LUK.012.034 ಯಾಕಂದರೆ ನಿಮ್ಮ ಸಂಪತ್ತು ಇರುವಲ್ಲಿಯೇ ನಿಮ್ಮ ಹೃದಯವು ಸಹ ಇರುವದು.
12:35b.LUK.012.035 ನಿಮ್ಮ ನಡುಗಳು ಕಟ್ಟಿರಲಿ; ನಿಮ್ಮ ದೀಪಗಳು ಉರಿಯುತ್ತಿರಲಿ.
12:36b.LUK.012.036 ನೀವಂತೂ ತಮ್ಮ ಒಡೆಯನು ಮದುವೆಯಿಂದ ಯಾವಾಗ ಹಿಂದಿರುಗುವನೋ ಎಂದು ಕಾಯುವ ಮತ್ತು ಅವನು ಬಂದು ತಟ್ಟಿದಾಗ ತಕ್ಷಣವೇ ಅವನಿಗೆ ತೆರೆಯುವ ಮನುಷ್ಯರಂತೆ ಇರ್ರಿ.
12:37b.LUK.012.037 ಒಡೆಯನು ಬಂದಾಗ ಯಾರು ಎಚ್ಚರವಾಗಿರುವದನ್ನು ಅವನು ಕಾಣುವನೋ ಆ ಸೇವಕರು ಧನ್ಯರು; ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಅವನು ಬಂದು ನಡುಕಟ್ಟಿಕೊಂಡು ಅವರನ್ನು ಊಟಕ್ಕೆ ಕೂಡ್ರಿಸಿ ಅವರಿಗೆ ತಾನೇ ಉಪಚರಿಸುವನು.
12:38b.LUK.012.038 ಅವನು ಎರಡನೇ ಜಾವದಲ್ಲಿ ಇಲ್ಲವೇ ಮೂರನೇ ಜಾವದಲ್ಲಿ ಬಂದು ಅವರನ್ನು ಹಾಗೆಯೇ ಕಂಡರೆ ಆ ಸೇವಕರು ಧನ್ಯರು.
12:39b.LUK.012.039 ಕಳ್ಳನು ಯಾವಗಳಿಗೆಯಲ್ಲಿ ಬರುವ ನೆಂಬದು ಮನೇ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು ತನ್ನ ಮನೆಯನ್ನು ಕನ್ನಾಕೊರೆಯ ಗೊಡಿಸುತ್ತಿರಲಿಲ್ಲವೆಂಬದನ್ನು ತಿಳುಕೊಳ್ಳಿರಿ.
12:40b.LUK.012.040 ಆದ ಕಾರಣ ನೀವು ಸಹ ಸಿದ್ಧವಾಗಿರ್ರಿ; ಯಾಕಂದರೆ ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ ಎಂದು ಹೇಳಿದನು.
12:41b.LUK.012.041 ಆಗ ಪೇತ್ರನು ಆತನಿಗೆ--ಕರ್ತನೇ, ನೀನು ಈ ಸಾಮ್ಯವನ್ನು ನಮಗೆ ಹೇಳುತ್ತೀಯೋ ಇಲ್ಲವೆ ಎಲ್ಲರಿಗೂ ಹೇಳುತ್ತೀಯೋ ಎಂದು ಕೇಳಿದ್ದಕ್ಕೆ
12:42b.LUK.012.042 ಕರ್ತನು--ಹಾಗಾದರೆ ತಕ್ಕಕಾಲದಲ್ಲಿ ಅವರ ಪಾಲಿನ ಆಹಾರವನ್ನು ಕೊಡುವದಕ್ಕಾಗಿ ಒಡೆಯನು ತನ್ನ ಮನೆಯಮೇಲೆ ನೇಮಿಸುವ ನಂಬಿಗಸ್ತನೂ ವಿವೇಕಿಯೂ ಆಗಿರುವ ಮನೇವಾರ್ತೆಯವನು ಯಾರು?
12:43b.LUK.012.043 ತನ್ನ ಒಡೆಯನು ಬಂದಾಗ ಯಾವನು ಹೀಗೆ ಮಾಡುವದನ್ನು ಕಾಣುವನೋ ಆ ಸೇವಕನು ಧನ್ಯನು;
12:44b.LUK.012.044 ಅವನು ತನಗಿರುವ ಎಲ್ಲಾದರ ಮೇಲೆ ಅವನನ್ನು ಅಧಿಕಾರಿಯನ್ನಾಗಿ ನೇಮಿಸುವನು ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.
12:45b.LUK.012.045 ಆದರೆ ಆ ಸೇವಕನು--ನನ್ನ ಒಡೆಯನು ಬರುವದಕ್ಕೆ ತಡಮಾಡುತ್ತಾನೆ ಎಂದು ತನ್ನ ಹೃದಯದಲ್ಲಿ ಅಂದು ಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯು ವದಕ್ಕೂ ತಿಂದು ಕುಡಿದು ಮತ್ತನಾಗುವದಕ್ಕೂ ಆರಂಭಿಸಿದರೆ
12:46b.LUK.012.046 ಅವನು ನಿರೀಕ್ಷಿಸದ ದಿನದಲ್ಲಿಯೂ ತಿಳಿಯದ ಗಳಿಗೆಯಲ್ಲಿಯೂ ಆ ಸೇವಕನ ಒಡೆಯನು ಬಂದು ಅವನನ್ನು ಕಠಿಣವಾಗಿ ಛೇದಿಸಿ ಅವನಿಗೆ ನಂಬಿಕೆಯಿಲ್ಲದವರ ಕೂಡ ಪಾಲನ್ನು ನೇಮಕ ಮಾಡುವನು.
12:47b.LUK.012.047 ಇದಲ್ಲದೆ ತನ್ನ ಒಡೆಯನ ಚಿತ್ತವನ್ನು ತಿಳಿದು ತನ್ನನ್ನು ಸಿದ್ಧಮಾಡಿಕೊಳ್ಳದೆ ಇಲ್ಲವೆ ಅವನ ಚಿತ್ತಕ್ಕೆ ಅನುಸಾರವಾಗಿ ಮಾಡದೆ ಇದ್ದ ಸೇವಕನು ಬಹಳ ಪೆಟ್ಟುಗಳನ್ನು ತಿನ್ನುವನು.
12:48b.LUK.012.048 ಆದರೆ ಪೆಟ್ಟುಗಳಿಗೆ ಯೋಗ್ಯವಾದವುಗಳನ್ನು ತಿಳಿಯದೆ ಮಾಡಿದವನು ಸ್ವಲ್ಪ ಪೆಟ್ಟುಗಳನ್ನು ತಿನ್ನುವನು. ಯಾಕಂದರೆ ಯಾವನಿಗೆ ಹೆಚ್ಚುಕೊಡಲ್ಪಟ್ಟಿದೆಯೋ ಅವನಿಂದ ಹೆಚ್ಚು ಕೇಳಲ್ಪಡು ವದು; ಯಾವನಿಗೆ ಮನುಷ್ಯರು ಹೆಚ್ಚಾಗಿ ಒಪ್ಪಿಸಿರುವರೋ ಅವನಿಂದ ಅವರು ಹೆಚ್ಚಾಗಿ ಕೇಳುವ
12:49b.LUK.012.049 ನಾನು ಭೂಮಿಯ ಮೇಲೆ ಬೆಂಕಿಯನ್ನು ಹಾಕುವದಕ್ಕಾಗಿ ಬಂದೆನು; ಅದು ಈಗಾಗಲೇ ಹೊತ್ತಿಕೊಂಡಿದ್ದರೆ ಮತ್ತೇನು ನನಗೆ ಬೇಕು?
12:50b.LUK.012.050 ಆದರೆ ನಾನು ಬಾಪ್ತಿಸ್ಮ ಮಾಡಿಸಿಕೊಳ್ಳುವ ಒಂದು ಬಾಪ್ತಿಸ್ಮ ಉಂಟು; ಅದು ನೆರವೇರುವ ತನಕ ನಾನು ಎಷ್ಟೋ ಇಕ್ಕಟ್ಟಿನಲ್ಲಿದ್ದೇನೆ!
12:51b.LUK.012.051 ನಾನು ಭೂಮಿಯ ಮೇಲೆ ಸಮಾಧಾನವನ್ನು ಕೊಡುವದಕ್ಕಾಗಿ ಬಂದಿದ್ದೇ ನೆಂದು ನೀವು ಭಾವಿಸುತ್ತೀರೋ? ಇಲ್ಲ, ಭೇದವನ್ನು ಉಂಟುಮಾಡುವದಕ್ಕೆ ಬಂದಿದ್ದೇನೆಂದು ನಾನು ನಿಮಗೆ ಹೇಳುತ್ತೇನೆ.
12:52b.LUK.012.052 ಇಂದಿನಿಂದ ಒಂದು ಮನೆಯಲ್ಲಿ ಐದುಮಂದಿ ಭೇದವಾಗಿ ಇಬ್ಬರಿಗೆ ವಿರೋಧವಾಗಿ ಮೂವರು ಮೂವರಿಗೆ ವಿರೋಧವಾಗಿ ಇಬ್ಬರು ಇರುವರು.
12:53b.LUK.012.053 ಮಗನಿಗೆ ವಿರೋಧವಾಗಿ ತಂದೆಯೂ ತಂದೆಗೆ ವಿರೋಧವಾಗಿ ಮಗನೂ ಮಗಳಿಗೆ ವಿರೋಧವಾಗಿ ತಾಯಿಯೂ ತಾಯಿಗೆ ವಿರೋಧವಾಗಿ ಮಗಳೂ ತನ್ನ ಸೊಸೆಗೆ ವಿರೋಧವಾಗಿ ಅತ್ತೆಯೂ ತನ್ನ ಅತ್ತೆಗೆ ವಿರೋಧವಾಗಿ ಸೊಸೆಯೂ ವಿಭಾಗಿಸ ಲ್ಪಡುವರು.
12:54b.LUK.012.054 ಆತನು ಇನ್ನು ಜನರಿಗೆ--ನೀವು ಪಶ್ಚಿಮದ ಕಡೆಯಿಂದ ಏಳುವ ಮೋಡವನ್ನು ನೋಡು ವಾಗ--ಮಳೆ ಬರುವದೆಂದು ತಕ್ಷಣವೇ ಅನ್ನುತ್ತೀರಿ; ಹಾಗೆಯೇ ಆಗುವದು.
12:55b.LUK.012.055 ದಕ್ಷಿಣಗಾಳಿ ಬೀಸುವದನ್ನು ನೀವು ನೋಡುವಾಗ--ಸೆಕೆಯಾಗುವದು ಎಂದು ನೀವು ಅನ್ನುತ್ತೀರಿ, ಅದು ಹಾಗೆಯೇ ಆಗುತ್ತದೆ.
12:56b.LUK.012.056 ಕಪಟಿಗಳೇ, ಭೂಮ್ಯಾಕಾಶಗಳ ಭಾವವನ್ನು ಅರಿತು ಕೊಳ್ಳುತ್ತೀರಿ; ಆದರೆ ಈ ಕಾಲವನ್ನು ನೀವು ಅರಿತು ಕೊಳ್ಳದಿರುವದು ಹೇಗೆ?
12:57b.LUK.012.057 ಹೌದು, ನಿಮ್ಮಷ್ಟಕ್ಕೆ ನೀವು ಸರಿಯಾದದ್ದನ್ನು ಯಾಕೆ ನಿರ್ಣಯಿಸಿಕೊಳ್ಳುವದಿಲ್ಲ?
12:58b.LUK.012.058 ನೀನು ನಿನ್ನ ಎದುರಾಳಿಯ ಸಂಗಡ ನ್ಯಾಯಾ ಧಿಪತಿಯ ಎದುರಿಗೆ ಹೋಗುವಾಗ ಮಾರ್ಗದಲ್ಲಿಯೇ ಅವನಿಂದ ಬಿಡಿಸಿಕೊಳ್ಳುವದಕ್ಕೆ ಪ್ರಯತ್ನಮಾಡು; ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಬಳಿಗೆ ಬಲವಂತವಾಗಿ ಎಳೆದಾನು; ಆಗ ನ್ಯಾಯಾಧಿ ಪತಿಯು ನಿನ್ನನ್ನು ಅಧಿಕಾರಿಗೆ ಒಪ್ಪಿಸಾನು ಮತ್ತು ಅಧಿಕಾರಿಯು ನಿನ್ನನ್ನು ಸೆನೀನು ಕೊನೆಯ ಕಾಸನ್ನು ಸಲ್ಲಿಸುವವರೆಗೂ ಅಲ್ಲಿಂದ ಬರುವದೇ ಇಲ್ಲವೆಂದು ನಾನು ನಿನಗೆ ಹೇಳುತ್ತೇನೆ ಅಂದನು.
12:59b.LUK.012.059 ನೀನು ಕೊನೆಯ ಕಾಸನ್ನು ಸಲ್ಲಿಸುವವರೆಗೂ ಅಲ್ಲಿಂದ ಬರುವದೇ ಇಲ್ಲವೆಂದು ನಾನು ನಿನಗೆ ಹೇಳುತ್ತೇನೆ ಅಂದನು.
13
13:1b.LUK.013.001 ಇದಲ್ಲದೆ ಪಿಲಾತನು ಗಲಿಲಾಯದವರ ರಕ್ತವನ್ನು ಅವರ ಬಲಿಗಳೊಂದಿಗೆ ಬೆರಸಿದ ವಿಷಯವನ್ನು ಆತನಿಗೆ ತಿಳಿಸಿದ ಕೆಲವರು ಆ ಸಮಯ ದಲ್ಲಿ ಅಲ್ಲಿದ್ದರು.
13:2b.LUK.013.002 ಆಗ ಯೇಸು ಅವರಿಗೆ--ಈ ಗಲಿ ಲಾಯದವರು ಇಂಥವುಗಳನ್ನು ಅನುಭವಿಸಿದ ಕಾರಣ ಅವರು ಎಲ್ಲಾ ಗಲಿಲಾಯದವರಿಗಿಂತ ಪಾಪಿಷ್ಠರೆಂದು ನೀವು ಭಾವಿಸುತ್ತೀರೋ?
13:3b.LUK.013.003 ಆದರೆ--ಹಾಗಲ್ಲವೆಂದು ನಾನು ನಿಮಗೆ ಹೇಳುತ್ತೇನೆ; ನೀವು ಮಾನಸಾಂತರ ಪಡದೆಹೋದರೆ ನೀವೆಲ್ಲರೂ ಅವರಂತೆಯೇ ನಾಶವಾ ಗುವಿರಿ.
13:4b.LUK.013.004 ಇಲ್ಲವೆ ಸಿಲೊವಾಮಿನಲ್ಲಿ ಗೋಪುರವು ಬಿದ್ದು ಸತ್ತ ಆ ಹದಿನೆಂಟು ಜನರು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಪಾಪಿಷ್ಠ ರೆಂದು ಯೋಚಿಸುತ್ತೀರೋ?
13:5b.LUK.013.005 ಆದರೆ--ಹಾಗಲ್ಲ ವೆಂದು ನಾನು ನಿಮಗೆ ಹೇಳುತ್ತೇನೆ; ನೀವು ಮಾನ ಸಾಂತರಪಡದೆ ಹೋದರೆ ನೀವೆಲ್ಲರೂ ಅವರಂತೆಯೇ ನಾಶವಾಗುವಿರಿ ಅಂದನು.
13:6b.LUK.013.006 ಆತನು ಈ ಸಾಮ್ಯವನ್ನು ಕೂಡ ಹೇಳಿದನು: ಒಬ್ಬಾನೊಬ್ಬ ಮನುಷ್ಯನಿಗೆ ತನ್ನ ದ್ರಾಕ್ಷೇತೋಟದಲ್ಲಿ ನೆಡಲ್ಪಟ್ಟಿದ್ದ ಒಂದು ಅಂಜೂರದ ಮರವಿತ್ತು; ಅವನು ಬಂದು ಅದರಲ್ಲಿ ಫಲವನ್ನು ಹುಡುಕಿದಾಗ ಒಂದೂ ಸಿಕ್ಕಲಿಲ್ಲ.
13:7b.LUK.013.007 ಆಗ ಅವನು ತನ್ನ ದ್ರಾಕ್ಷೇತೋಟ ಮಾಡು ವವನಿಗೆ--ಇಗೋ, ಈ ಮೂರು ವರುಷಗಳಿಂದ ನಾನು ಈ ಅಂಜೂರದ ಮರದಲ್ಲಿ ಫಲ ಹುಡುಕಿದರೂ ಒಂದನ್ನೂ ಕಂಡುಕೊಳ್ಳಲಿಲ್ಲ; ಇದನ್ನು ಕಡಿದುಹಾಕು; ಭೂಮಿಗೆ ಇದು ಯಾಕೆ ಭಾರವಾಗಿರಬೇಕು ಎಂದು ಹೇಳಿದನು.
13:8b.LUK.013.008 ಆದರೆ ಅವನು ಪ್ರತ್ಯುತ್ತರವಾಗಿ ಅವ ನಿಗೆ--ಒಡೆಯನೇ, ನಾನು ಅದರ ಸುತ್ತಲೂ ಅಗೆದು ಗೊಬ್ಬರ ಹಾಕುವ ವರೆಗೆ ಈ ವರುಷವೂ ಇದನ್ನು ಬಿಡು;
13:9b.LUK.013.009 ಇದು ಫಲ ಫಲಿಸಿದರೆ ಸರಿ; ಇಲ್ಲವಾದರೆ ನೀನು ಇದನ್ನು ಕಡಿದುಹಾಕಬಹುದು ಅಂದನು.
13:10b.LUK.013.010 ಆತನು ಸಬ್ಬತ್ತಿನಲ್ಲಿ ಸಭಾಮಂದಿರದಲ್ಲಿ ಬೋಧಿ ಸುತ್ತಾ ಇದ್ದನು.
13:11b.LUK.013.011 ಆಗ ಇಗೋ, ಹದಿನೆಂಟು ವರುಷ ಗಳಿಂದಲೂ ದುರಾತ್ಮನಿಂದ ರೋಗ ಪೀಡಿತಳಾಗಿ ನಡುಬೊಗ್ಗಿ ಹೋಗಿದ್ದ ಒಬ್ಬ ಸ್ತ್ರೀಯು ಅಲ್ಲಿ ಇದ್ದಳು; ಅವಳು ಯಾವ ರೀತಿಯಲ್ಲಿಯೂ ತನ್ನಷ್ಟಕ್ಕೆ ತಾನೇ ನೆಟ್ಟಗೆ ನಿಲ್ಲಲಾರದೆ ಇದ್ದಳು.
13:12b.LUK.013.012 ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು ಆಕೆಗೆ--ಸ್ತ್ರೀಯೇ, ನೀನು ಈ ನಿನ್ನ ರೋಗದಿಂದ ಬಿಡುಗಡೆಯಾಗಿದ್ದೀ ಎಂದು ಹೇಳಿ
13:13b.LUK.013.013 ಆತನು ಆಕೆಯ ಮೇಲೆ ತನ್ನ ಕೈಗಳನ್ನು ಇಟ್ಟನು; ಕೂಡಲೆ ಆಕೆಯು ನೆಟ್ಟಗಾಗಿ ದೇವರನ್ನು ಮಹಿಮೆಪಡಿಸಿದಳು.
13:14b.LUK.013.014 ಯೇಸು ಸಬ್ಬತ್ ದಿನದಲ್ಲಿ ಸ್ವಸ್ಥಪಡಿಸಿದ ಕಾರಣ ಸಭಾಮಂದಿರದ ಅಧಿಕಾರಿಯು ಕೋಪದಿಂದ ಜನರಿಗೆ--ಆರು ದಿವಸಗಳಲ್ಲಿ ಮನು ಷ್ಯರು ಕೆಲಸ ಮಾಡತಕ್ಕದ್ದು. ಆದದರಿಂದ ಅವುಗಳಲ್ಲಿ ಅವರು ಬಂದು ಸ್ವಸ್ಥತೆ ಹೊಂದಲಿ; ಸಬ್ಬತ್ ದಿನದಲ್ಲಿ ಬೇಡ ಅಂದನು.
13:15b.LUK.013.015 ಅದಕ್ಕೆ ಕರ್ತನು ಪ್ರತ್ಯುತ್ತರವಾಗಿ ಅವನಿಗೆ--ಕಪಟಿಯೇ, ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ತಿನಲ್ಲಿ ತನ್ನ ಎತ್ತನ್ನಾಗಲಿ ಇಲ್ಲವೆ ಕತ್ತೆಯನ್ನಾಗಲಿ ಕೊಟ್ಟಿಗೆಯಿಂದ ಬಿಡಿಸಿ ನೀರು ಕುಡಿಸುವದಕ್ಕಾಗಿ ಹೋಗುವನಲ್ಲವೇ?
13:16b.LUK.013.016 ಹಾಗಾದರೆ ಇಗೋ, ಅಬ್ರ ಹಾಮನ ಮಗಳಾದ ಈ ಸ್ತ್ರೀಯನ್ನು ಹದಿನೆಂಟು ವರುಷಗಳಿಂದ ಸೈತಾನನು ಕಟ್ಟಿಹಾಕಿದ ಈ ಬಂಧನ ದಿಂದ ಸಬ್ಬತ್ ದಿನದಲ್ಲಿ ಬಿಡಿಸಬಾರದೋ ಅಂದನು.
13:17b.LUK.013.017 ಆತನು ಇವುಗಳನ್ನು ಹೇಳುತ್ತಿರುವಾಗ ಆತನ ವಿರೋಧಿಗಳೆಲ್ಲರೂ ನಾಚಿಕೆಪಟ್ಟರು; ಆದರೆ ಜನರೆಲ್ಲಾ ಆತನಿಂದ ನಡೆದ ಎಲ್ಲಾ ಮಹತ್ತಾದ ಕಾರ್ಯಗಳಿಗಾಗಿ ಸಂತೋಷಪಟ್ಟರು.
13:18b.LUK.013.018 ಇದಲ್ಲದೆ ಆತನು--ದೇವರ ರಾಜ್ಯವು ಯಾವ ದಕ್ಕೆ ಹೋಲಿಕೆಯಾಗಿದೆ? ನಾನು ಯಾವದಕ್ಕೆ ಅದನ್ನು ಹೋಲಿಸಲಿ?
13:19b.LUK.013.019 ಅದು ಒಬ್ಬ ಮನುಷ್ಯನು ಸಾಸಿವೆಕಾಳನ್ನು ತೆಗೆದುಕೊಂಡು ಹೋಗಿ ತನ್ನ ತೋಟ ದಲ್ಲಿ ಹಾಕಿದ್ದಕ್ಕೆ ಹೋಲಿಕೆಯಾಗಿದೆ; ಅದು ಬೆಳೆದು ಒಂದು ದೊಡ್ಡ ಮರವಾಯಿತು; ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಮಾಡಿದವು ಅಂದನು.
13:20b.LUK.013.020 ಆತನು ತಿರಿಗಿ--ದೇವರ ರಾಜ್ಯವನ್ನು ಯಾವದಕ್ಕೆ ಹೋಲಿಸಲಿ?
13:21b.LUK.013.021 ಒಬ್ಬ ಸ್ತ್ರೀಯು ಹುಳಿಯನ್ನು ತಕ್ಕೊಂಡು ಮೂರು ಸೇರು ಹಿಟ್ಟೆಲ್ಲವೂ ಹುಳಿಯಾಗುವ ತನಕ ಅದರಲ್ಲಿ ಅಡಗಿಸಿಟ್ಟ ಹುಳಿಗೆ ಅದು ಹೋಲಿಕೆ ಯಾಗಿದೆ ಅಂದನು.
13:22b.LUK.013.022 ಆತನು ಪಟ್ಟಣಗಳನ್ನೂ ಹಳ್ಳಿಗಳನ್ನೂ ಹಾದು, ಬೋಧಿಸುತ್ತಾ ಯೆರೂಸಲೇಮಿನ ಕಡೆಗೆ ಪ್ರಯಾಣ ಮಾಡಿದನು.
13:23b.LUK.013.023 ಆಗ ಒಬ್ಬನು ಆತನಿಗೆ--ಕರ್ತನೇ, ರಕ್ಷಣೆ ಹೊಂದುವವರು ಸ್ವಲ್ಪ ಜನರೋ ಎಂದು ಕೇಳಲು ಆತನು ಅವರಿಗೆ--
13:24b.LUK.013.024 ಇಕ್ಕಟ್ಟಾದ ಬಾಗಲಿನಿಂದ ಒಳಗೆ ಪ್ರವೇಶಿಸುವದಕ್ಕೆ ಪ್ರಯಾಸಪಡಿರಿ; ಯಾಕಂ ದರೆ ಅನೇಕರು ಒಳಗೆ ಪ್ರವೇಶಿಸುವದಕ್ಕೆ ಪ್ರಯತ್ನಿಸಿ ದರೂ ಆಗುವದಿಲ್ಲ ಎಂದು ನಾನು ನಿಮಗೆ ಹೇಳು ತ್ತೇನೆ.
13:25b.LUK.013.025 ಮನೇಯಜಮಾನನು ಒಂದು ಸಾರಿ ಎದ್ದು ಬಾಗಲನ್ನು ಮುಚ್ಚಿಕೊಂಡರೆ ನೀವು ಹೊರಗೆ ನಿಂತು ಕೊಂಡು ಬಾಗಲನ್ನು ತಟ್ಟುತ್ತಾ--ಕರ್ತನೇ, ಕರ್ತನೇ, ನಮಗಾಗಿ ತೆರೆ ಎಂದು ಹೇಳುವದಕ್ಕೆ ಆರಂಭಿಸಿದಾಗ ಆತನು ನಿಮಗೆ ಪ್ರತ್ಯುತ್ತರವಾಗಿ--ನೀವು ಎಲ್ಲಿಯ ವರೋ ನಾನರಿಯೆ ಎಂದು ಹೇಳುವನು.
13:26b.LUK.013.026 ಆಗ ನೀವು--ನಿನ್ನ ಸನ್ನಿಧಿಯಲ್ಲಿ ನಾವು ತಿಂದು ಕುಡಿದೆವು; ಮತ್ತು ನೀನು ನಮ್ಮ ಬೀದಿಗಳಲ್ಲಿ ಬೋಧಿಸಿದಿ ಎಂದು ಹೇಳಲಾರಂಭಿಸುವಿರಿ.
13:27b.LUK.013.027 ಆದರೆ ಆತನು--ನೀವು ಎಲ್ಲಿ ಯವರೋ ನಾನರಿಯೆ; ಅಕ್ರಮ ಮಾಡುವವರಾದ ನೀವೆಲ್ಲರೂ ನನ್ನಿಂದ ಹೊರಟುಹೋಗಿರಿ ಎಂದು ಹೇಳುವನೆಂದು ನಾನು ನಿಮಗೆ ಹೇಳುತ್ತೇನೆ.
13:28b.LUK.013.028 ಆದರೆ ನೀವು ಅಬ್ರಹಾಮ ಇಸಾಕ ಯಾಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರರಾಜ್ಯದಲ್ಲಿ ಇರುವದನ್ನೂ ನೀವು ಮಾತ್ರ ಹೊರಗೆ ದೊಬ್ಬಲ್ಪಟ್ಟಿರುವದನ್ನೂ ನೋಡು ವಾಗ ಅಲ್ಲಿ ನಿಮಗೆ ಗೋಳಾಟವೂ ಹಲ್ಲುಕಡಿ ಯೋಣವೂ ಇರುವವು.
13:29b.LUK.013.029 ಇದಲ್ಲದೆ ಪೂರ್ವ ಪಶ್ಚಿಮ ಉತ್ತರ ದಕ್ಷಿಣಗಳಿಂದ ಅವರು ಬಂದು ದೇವರ ರಾಜ್ಯದಲ್ಲಿ ಕೂತುಕೊಳ್ಳುವರು.
13:30b.LUK.013.030 ಆಗ ಇಗೋ, ಕೊನೆಯವರು ಮೊದಲನೆಯವರಾಗುವರು; ಮೊದ ಲನೆಯವರು ಕೊನೆಯವರಾಗುವರು ಎಂದು ಹೇಳಿದನು.
13:31b.LUK.013.031 ಅದೇ ದಿನದಲ್ಲಿ ಫರಿಸಾಯರಲ್ಲಿ ಕೆಲವರು ಆತನ ಬಳಿಗೆ ಬಂದು--ನೀನು ಇಲ್ಲಿಂದ ಹೊರಟುಹೋಗು; ಯಾಕಂದರೆ ಹೆರೋದನು ನಿನ್ನನ್ನು ಕೊಲ್ಲುವನು ಎಂದು ಆತನಿಗೆ ಹೇಳಿದರು.
13:32b.LUK.013.032 ಅದಕ್ಕೆ ಆತನು ಅವರಿಗೆ--ಇಗೋ, ನಾನು ಈ ದಿವಸ ಮತ್ತು ನಾಳೆ ದೆವ್ವಗಳನ್ನು ಬಿಡಿಸಿ ಸ್ವಸ್ಥಮಾಡುತ್ತೇನೆ; ಮೂರನೆಯ ದಿನದಲ್ಲಿ ನಾನು ಸಿದ್ಧಿಗೆ ಬರುತ್ತೇನೆ ಎಂದು ನೀವು ಹೋಗಿ ಆ ನರಿಗೆ ಹೇಳಿರಿ.
13:33b.LUK.013.033 ಆದಾಗ್ಯೂ ಈ ದಿವಸ ನಾಳೆ ಮತ್ತು ನಾಡದ್ದು ನಾನು ಸಂಚರಿಸಲೇಬೇಕು; ಯಾಕಂದರೆ ಒಬ್ಬ ಪ್ರವಾದಿಯು ಯೆರೂಸಲೇಮಿನ ಹೊರಗೆ ಕೊಲ್ಲಲ್ಪಡಲಾರನು.
13:34b.LUK.013.034 ಓ ಯೆರೂಸಲೇಮೇ,ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಲ್ಪಟ್ಟವರಿಗೆ ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಎಷ್ಟೋ ಸಾರಿ ಕೂಡಿಸಬೇಕೆಂದಿದ್ದೆನು; ಆದರೆ ನಿನಗೆ ಅದು ಮನಸ್ಸಿಇಗೋ, ನಿಮ್ಮ ಮನೆಯು ಹಾಳಾಗಿ ನಿಮಗೆ ಬಿಡಲ್ಪಟ್ಟಿದೆ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ಸಮಯವು ಬರುವ ತನಕ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
13:35b.LUK.013.035 ಇಗೋ, ನಿಮ್ಮ ಮನೆಯು ಹಾಳಾಗಿ ನಿಮಗೆ ಬಿಡಲ್ಪಟ್ಟಿದೆ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ಸಮಯವು ಬರುವ ತನಕ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
14
14:1b.LUK.014.001 ಇದಾದ ಮೇಲೆ ಆತನು ಸಬ್ಬತ್ ದಿನದಲ್ಲಿ ಫರಿಸಾಯರ ಮುಖ್ಯಸ್ಥರಲ್ಲಿ ಒಬ್ಬನ ಮನೆಯೊಳಗೆ ಊಟಕ್ಕೆ ಹೋದಾಗ ಅವರು ಆತನನ್ನು ಹೊಂಚಿನೋಡುತ್ತಾ ಇದ್ದರು.
14:2b.LUK.014.002 ಇಗೋ, ಅಲ್ಲಿ ಜಲೊದರವುಳ್ಳ ಒಬ್ಬ ಮನುಷ್ಯನು ಆತನ ಎದು ರಿನಲ್ಲಿ ಇದ್ದನು.
14:3b.LUK.014.003 ಆಗ ಯೇಸು ನ್ಯಾಯಶಾಸ್ತ್ರಿಗಳಿಗೂ ಫರಿಸಾಯರಿಗೂ--ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವದು ನ್ಯಾಯವೋ ಎಂದು ಕೇಳಿದನು.
14:4b.LUK.014.004 ಆದರೆ ಅವರು ಮೌನವಾಗಿದ್ದರು. ಆಗ ಆತನು ಅವನನ್ನು ಕೈಹಿಡಿದು ಸ್ವಸ್ಥಪಡಿಸಿಕಳುಹಿಸಿದನು.
14:5b.LUK.014.005 ಅವರಿಗೆ ಉತ್ತರಕೊಟ್ಟು-- ನಿಮ್ಮಲ್ಲಿ ಒಬ್ಬನ ಕತ್ತೆಯಾಗಲೀ ಎತ್ತಾಗಲೀ ಒಂದು ಕುಣಿಯಲ್ಲಿ ಬಿದ್ದರೆ ಅದನ್ನು ತಕ್ಷಣವೇ ಸಬ್ಬತ್ತಿನಲ್ಲಿ ಮೇಲಕ್ಕೆ ಎಳೆಯುವದಿಲ್ಲವೇ ಅಂದನು.
14:6b.LUK.014.006 ಇವುಗಳ ವಿಷಯವಾಗಿ ಅವರು ತಿರಿಗಿ ಆತನಿಗೆ ಉತ್ತರ ಕೊಡಲಾರದೆ ಇದ್ದರು.
14:7b.LUK.014.007 (ಊಟಕ್ಕೆ) ಕರೆಯಲ್ಪಟ್ಟವರು ತಮಗಾಗಿ ಮುಖ್ಯ ಸ್ಥಳಗಳನ್ನು ಹೇಗೆ ಆರಿಸಿಕೊಂಡರೆಂದು ಆತನು ಗುರು ತಿಸಿ ಸಾಮ್ಯದಿಂದ ಅವರಿಗೆ ಹೇಳಿದ್ದೇನಂದರೆ--
14:8b.LUK.014.008 ಯಾವನಾದರೂ ನಿನ್ನನ್ನು ಮದುವೆಗೆ ಕರೆದರೆ ಉನ್ನತ ಸ್ಥಳದಲ್ಲಿ ಕೂತುಕೊಳ್ಳಬೇಡ; ಯಾಕಂದರೆ ಅವನು ನಿನಗಿಂತಲೂ ಗೌರವವುಳ್ಳ ಮನುಷ್ಯನನ್ನು ಕರೆದಿರ ಬಹುದು;
14:9b.LUK.014.009 ಆಗ ನಿನ್ನನ್ನು ಮತ್ತು ಅವನನ್ನು ಕರೆದವನು ಬಂದು ನಿನಗೆ--ಈ ಮನುಷ್ಯನಿಗೆ ಸ್ಥಳಕೊಡು ಎಂದು ಹೇಳುವಾಗ ನೀನು ನಾಚಿಕೆಯಿಂದ ಕಡೇ ಸ್ಥಳದಲ್ಲಿ ಕೂತುಕೊಳ್ಳಬೇಕಾಗಿರುವದು.
14:10b.LUK.014.010 ಆದರೆ ನೀನು ಕರೆಯಲ್ಪಟ್ಟಾಗ ಹೋಗಿ ಕಡೇ ಸ್ಥಳದಲ್ಲಿ ಕೂತುಕೋ; ಆಗ ನಿನ್ನನ್ನು ಕರೆದಾತನು ಬಂದು ನಿನಗೆ--ಸ್ನೇಹಿತನೇ, ಮೇಲಕ್ಕೆ ಹೋಗು ಎಂದು ಹೇಳುವಾಗ ನಿನ್ನ ಜೊತೆ ಯಲ್ಲಿ ಊಟಕ್ಕೆ ಕೂತವರ ಮುಂದೆ ನಿನಗೆ ಗೌರವ ವಿರುವದು.
14:11b.LUK.014.011 ಯಾವನು ತನ್ನನ್ನು ತಾನೇ ಹೆಚ್ಚಿಸಿಕೊಳ್ಳು ತ್ತಾನೋ ಅವನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.
14:12b.LUK.014.012 ಆತನು ತನ್ನನ್ನು ಕರೆದವನಿಗೆ ಸಹ ಹೇಳಿದ್ದೇ ನಂದರೆ--ನೀನು ಮಧ್ಯಾಹ್ನದ ಊಟಕ್ಕೆ ಇಲ್ಲವೆ ಸಾಯಂಕಾಲದ ಊಟಕ್ಕೆ ಸಿದ್ಧಪಡಿಸಿದಾಗ ನಿನ್ನ ಸ್ನೇಹಿತರನ್ನಾಗಲೀ ನಿನ್ನ ಸಹೋದರರನ್ನಾಗಲೀ ನಿನ್ನ ಬಂಧುಗಳನ್ನಾಗಲೀ ಇಲ್ಲವೆ ಐಶ್ವರ್ಯವಂತರಾದ ನೆರೆಯವರನ್ನಾಗಲೀ ಕರೆಯಬೇಡ; ಯಾಕಂದರೆ ಅ
14:13b.LUK.014.013 ಆದರೆ ನೀನು ಔತಣ ಮಾಡಿಸಿದಾಗ ಬಡವರನ್ನೂ ಊನವಾದವರನ್ನೂ ಕುಂಟರನ್ನೂ ಕುರುಡರನ್ನೂ ಕರೆ;
14:14b.LUK.014.014 ಆಗ ಅವರು ನಿನಗೆ ಪ್ರತ್ಯುಪಕಾರ ಮಾಡುವದಕ್ಕೆ ಆಗದಿರುವ ದರಿಂದ ನೀನು ಧನ್ಯನಾಗುವಿ. ಯಾಕಂದರೆ ನೀತಿವಂತರ ಪುನರುತ್ಥಾನದಲ್ಲಿ ನಿನಗೆ ಪ್ರತ್ಯುಪಕಾರವಾಗುವದು.
14:15b.LUK.014.015 ಆಗ ಆತನ ಸಂಗಡ ಊಟಕ್ಕೆ ಕೂತವರಲ್ಲಿ ಒಬ್ಬನು ಈ ಸಂಗತಿಗಳನ್ನು ಕೇಳಿ ಆತನಿಗೆ--ದೇವರ ರಾಜ್ಯದಲ್ಲಿ ಊಟಮಾಡುವವನು ಧನ್ಯನು ಎಂದು ಹೇಳಿದನು.
14:16b.LUK.014.016 ಆಗ ಆತನು ಅವನಿಗೆ--ಒಬ್ಬಾನೊಬ್ಬ ಮನುಷ್ಯನು ಒಂದು ದೊಡ್ಡ ಔತಣಮಾಡಿಸಿ ಅನೇಕರನ್ನು ಕರೆದನು.
14:17b.LUK.014.017 ಔತಣದ ಸಮಯವಾದಾಗ ಕರೆಯಲ್ಪಟ್ಟವರಿಗೆ ಅವನು--ಎಲ್ಲವೂ ಸಿದ್ಧವಾಗಿದೆ, ಬನ್ನಿರಿ ಎಂದು ಹೇಳುವದಕ್ಕಾಗಿ ತನ್ನ ಸೇವಕನನ್ನು ಕಳುಹಿಸಿದನು.
14:18b.LUK.014.018 ಆದರೆ ಅವರೆಲ್ಲರೂ ಒಂದೇ ಮನ ಸ್ಸಿನಿಂದ ನೆವ ಹೇಳಲಾರಂಭಿಸಿ ಮೊದಲನೆಯವನು ಅವನಿಗೆ--ನಾನು ಒಂದು ತುಂಡು ಭೂಮಿಯನ್ನು ಕೊಂಡುಕೊಂಡಿದ್ದೇನೆ, ಹೋಗಿ ಅದನ್ನು ನೋಡುವದು ಅವಶ್ಯವಾಗಿದೆ; ನನ್ನನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
14:19b.LUK.014.019 ಬೇರೊಬ್ಬನು-- ನಾನು ಐದು ಜೊತೆ ಎತ್ತುಗಳನ್ನು ಕೊಂಡುಕೊಂಡಿ ದ್ದೇನೆ, ಅವುಗಳನ್ನು ಪರೀಕ್ಷಿಸುವದಕ್ಕಾಗಿ ಹೋಗುತ್ತೇನೆ; ನನ್ನನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
14:20b.LUK.014.020 ಇನ್ನೊಬ್ಬನು--ನಾನು ಒಬ್ಬಳನ್ನು ಮದುವೆ ಮಾಡಿಕೊಂಡಿದ್ದೇನೆ, ಅದಕೋಸ್ಕರ ನಾನು ಬರ ಲಾರೆನು ಅಂದನು.
14:21b.LUK.014.021 ಹೀಗೆ ಆ ಸೇವಕನು ಬಂದು ತನ್ನ ಯಜಮಾನನಿಗೆ ಈ ವಿಷಯಗಳನ್ನು ತಿಳಿಸಿದನು. ಆಗ ಆ ಮನೇಯಜಮಾನನು ಕೋಪಗೊಂಡು ತನ್ನ ಸೇವಕನಿಗೆ--ನೀನು ಬೇಗನೆ ಪಟ್ಟಣದ ಬೀದಿಗಳಿಗೂ ಸಂದುಗಳಿಗೂ ಹೋಗಿ ಬಡವರನ್ನೂ ಊನವಾದ ವರನ್ನೂ ಕುಂಟರನ್ನೂ ಕುರುಡರನ್ನೂ ಇಲ್ಲಿ ಒಳಗೆ ಕರಕೆ
14:22b.LUK.014.022 ಆಗ ಆ ಸೇವಕನು--ಒಡೆಯನೇ, ನೀನು ಅಪ್ಪಣೆಕೊಟ್ಟಂತೆ ಮಾಡಿದ್ದಾ ಯಿತು; ಇನ್ನೂ ಸ್ಥಳವದೆ ಅಂದನು.
14:23b.LUK.014.023 ಆಗ ಯಜ ಮಾನನು ಸೇವಕನಿಗೆ--ನೀನು ಬೀದಿಗಳಿಗೂ ಬೇಲಿಗಳ ಬಳಿಗೂ ಹೊರಟುಹೋಗಿ ನನ್ನ ಮನೆ ತುಂಬಿಕೊಳ್ಳುವಂತೆ ಒಳಗೆ ಬರಲು ಅವರನ್ನು ಬಲ ವಂತಮಾಡು;
14:24b.LUK.014.024 ಕರೆಯಲ್ಪಟ್ಟ ಆ ಜನರಲ್ಲಿ ಒಬ್ಬ ನಾದರೂ ನನ್ನ ಔತಣವನ್ನು ರುಚಿನೋಡಬಾರದು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
14:25b.LUK.014.025 ಇದಲ್ಲದೆ ದೊಡ್ಡ ಸಮೂಹಗಳು ಆತನ ಸಂಗಡ ಹೋಗುತ್ತಿರಲು ಆತನು ತಿರುಗಿಕೊಂಡು ಅವರಿಗೆ--
14:26b.LUK.014.026 ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆ ಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ಹೌದು, ತನ್ನ ಸ್ವಂತ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರ ಲಾರನು.
14:27b.LUK.014.027 ಯಾವನಾದರೂ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆಬಾರದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.
14:28b.LUK.014.028 ನಿಮ್ಮಲ್ಲಿ ಯಾವನಾದರೂ ಗೋಪುರವನ್ನು ಕಟ್ಟುವದಕ್ಕೆ ಉದ್ದೇಶವುಳ್ಳವನಾದರೆ ಅವನು ಮೊದಲು ಕೂತುಕೊಂಡು ಅದನ್ನು ಪೂರೈಸು ವದಕ್ಕೆ ಬೇಕಾದ ಖರ್ಚು ತನ್ನಲ್ಲಿ ಉಂಟೋ ಎಂದು ಲೆಕ್ಕ ಮಾಡುವದಿಲ್ಲವೋ?
14:29b.LUK.014.029 ಒಂದು ವೇಳೆ ಹಾಗೆ ಲೆಕ್ಕ ಮಾಡದೆ ಅವನು ಅದಕ್ಕೆ ಅಸ್ತಿವಾರ ಹಾಕಿದ ಮೇಲೆ ಅದನ್ನು ಪೂರೈಸದಿದ್ದರೆ ನೋಡುವವರೆಲ್ಲರೂ ಅವನಿಗೆ ಹಾಸ್ಯ ಮಾಡುವದಕ್ಕೆ ಆರಂಭಿಸಿ--
14:30b.LUK.014.030 ಈ ಮನುಷ್ಯನು ಕಟ್ಟುವದಕ್ಕೆ ಆರಂಭಿಸಿ ಪೂರ್ತಿಮಾಡ ಲಾರದೆ ಹೋದನು ಎಂದು ಅನ್ನುವರು.
14:31b.LUK.014.031 ಇಲ್ಲವೆ ಯಾವ ಅರಸನಾದರೂ ಬೇರೆ ಅರಸನಿಗೆ ವಿರೋಧ ವಾಗಿ ಯುದ್ಧಮಾಡುವದಕ್ಕೆ ಹೋಗುವಾಗ ಮೊದಲು ಕೂತುಕೊಂಡು ತನಗೆ ವಿರೋಧವಾಗಿ ಇಪ್ಪತ್ತು ಸಾವಿರ (ಸೈನ್ಯ)ದೊಂದಿಗೆ ಬರುವ ಆ ಅರಸನನ್ನು ತನ್ನ ಹತು ಸಾವಿರ (ಸೈನ್ಯ)ದೊಂದಿಗೆ ಎದುರಿಸಲು ಸಮರ್ಥನೋ ಎಂದು ವಿಚಾರಿಸುವದಿಲ್ಲವೋ?
14:32b.LUK.014.032 ಇಲ್ಲವೆ ಅವನು ಇನ್ನು ದೂರದಲ್ಲಿರುವಾಗಲೇ ತನ್ನ ರಾಯಭಾರಿಗಳನ್ನು ಕಳುಹಿಸಿ ಸಮಾಧಾನದ ಶರತ್ತುಗಳಿಗಾಗಿ ಕೋರುವ ದಿಲ್ಲವೋ?
14:33b.LUK.014.033 ಅದರಂತೆಯೇ ನಿಮ್ಮಲ್ಲಿ ಯಾವನಾ ದರೂ ತನಗಿರುವವುಗಳನ್ನೆಲ್ಲಾ ಬಿಟ್ಟುಬಿಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.
14:34b.LUK.014.034 ಉಪ್ಪು ಒಳ್ಳೇದು; ಆದರೆ ಉಪ್ಪು ತನ್ನ ರುಚಿ ಯನ್ನು ಕಳೆದುಕೊಂಡರೆ ಅದಕ್ಕೆ ಇನ್ನಾತರಿಂದ ರುಚಿ ಬಂದೀತು?ಅದು ಭೂಮಿಗಾದರೂ ತಿಪ್ಪೆ ಗಾದರೂ ಪ್ರಯೋಜನವಿಲ್ಲ; ಅದನ್ನು ಜನರು ಹೊರಗೆ ಹಾಕುತ್ತಾರೆ. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.
14:35b.LUK.014.035 ಅದು ಭೂಮಿಗಾದರೂ ತಿಪ್ಪೆ ಗಾದರೂ ಪ್ರಯೋಜನವಿಲ್ಲ; ಅದನ್ನು ಜನರು ಹೊರಗೆ ಹಾಕುತ್ತಾರೆ. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.
15
15:1b.LUK.015.001 ಇದಾದ ಮೇಲೆ ಎಲ್ಲಾ ಸುಂಕದವರೂ ಪಾಪಿಗಳೂ ಉಪದೇಶವನ್ನು ಕೇಳುವದ ಕ್ಕಾಗಿ ಆತನ ಸವಿಾಪಕ್ಕೆ ಬಂದರು.
15:2b.LUK.015.002 ಫರಿಸಾಯರು ಮತ್ತು ಶಾಸ್ತ್ರಿಗಳು--ಇವನು ಪಾಪಿಗಳನ್ನು ಅಂಗೀಕರಿಸಿ ಅವರೊಂದಿಗೆ ಊಟ ಮಾಡುತ್ತಾನೆ ಎಂದು ಹೇಳುತ್ತಾ ಗುಣುಗುಟ್ಟಿದರು.
15:3b.LUK.015.003 ಆತನು ಅವರಿಗೆ ಈ ಸಾಮ್ಯವನ್ನು ಹೇಳಿ ದನು--
15:4b.LUK.015.004 ನಿಮ್ಮಲ್ಲಿ ಯಾವ ಮನುಷ್ಯನು ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದನ್ನು ಕಳೆದು ಕೊಂಡರೆ ಅವನು ತೊಂಭತ್ತೊಂಭತ್ತನ್ನು ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ವರೆಗೆ ಅದನ್ನು ಹುಡುಕಿಕೊಂಡು ಹೋಗದಿರುವನೇ?
15:5b.LUK.015.005 ಅವನು ಆ ಕುರಿಯನ್ನು ಕಂಡುಕೊಂಡ ಮೇಲೆ ಸಂತೋಷ ಪಡುತ್ತಾ ಅದನ್ನು ತನ್ನ ಹೆಗಲುಗಳ ಮೇಲೆ ಹೊತ್ತು ಕೊಳ್ಳುವನು.
15:6b.LUK.015.006 ಆಮೇಲೆ ಅವನು ಮನೆಗೆ ಬಂದು ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಾಗಿ ಕರೆದು ಅವರಿಗೆ--ನನ್ನ ಸಂಗಡ ಸಂತೋಷಪಡಿರಿ;ಯಾಕಂದರೆ ಕಳೆದುಹೋದ ನನ್ನ ಕುರಿಯನ್ನು ನಾನು ಕಂಡು ಕೊಂಡೆನು ಅನ್ನುವನು.
15:7b.LUK.015.007 ಆದರಂತೆಯೇ ಮಾನಸಾಂತ ರಕ್ಕೆ ಅವಶ್ಯವಿಲ್ಲದ ತೊಂಭತ್ತೊಂಭತ್ತು ನೀತಿವಂತರಿಗಿಂತ ಮಾನಸಾಂತರಪಡುವ ಒಬ್ಬಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
15:8b.LUK.015.008 ಯಾವ ಸ್ತ್ರೀಯು ತನ್ನಲ್ಲಿ ಹತ್ತು ಬೆಳ್ಳಿಯ ನಾಣ್ಯಗಳಿರಲಾಗಿ ಒಂದು ನಾಣ್ಯವನ್ನು ಕಳೆದುಕೊಂಡರೆ ದೀಪಹಚ್ಚಿ ಮನೆಯನ್ನು ಗುಡಿಸಿ ಅವಳು ಅದನ್ನು ಕಂಡುಕೊಳ್ಳುವ ವರೆಗೆ ಜಾಗ್ರತೆಯಿಂದ ಹುಡುಕುವ ದಿಲ್ಲವೇ?
15:9b.LUK.015.009 ಅವಳು ಅದನ್ನು ಕಂಡುಕೊಂಡ ಮೇಲೆ ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಾಗಿ ಕರೆದು ಅವರಿಗೆ--ನನ್ನ ಸಂಗಡ ಸಂತೋಷಪಡಿರಿ; ಯಾಕಂ ದರೆ ನಾನು ಕಳಕೊಂಡಿದ್ದ ನಾಣ್ಯವನ್ನು ಕಂಡುಕೊಂಡೆನು ಅನ್ನುವಳು.
15:10b.LUK.015.010 ಅದೇ ಪ್ರಕಾರ ಮಾನಸಾಂತರಪಡುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
15:11b.LUK.015.011 ಆತನು--ಒಬ್ಬಾನೊಬ್ಬ ಮನುಷ್ಯನಿಗೆ ಇಬ್ಬರು ಕುಮಾರರಿದ್ದರು.
15:12b.LUK.015.012 ಅವರಲ್ಲಿ ಕಿರಿಯವನು ತನ್ನ ತಂದೆಗೆ--ಅಪ್ಪಾ, ಆಸ್ತಿಯಲ್ಲಿ ನನಗೆ ಬರತಕ್ಕ ಪಾಲನ್ನು ಕೊಡು ಅಂದನು; ಆಗ ಅವನು ತನ್ನ ಬದುಕನ್ನು ಅವರಿಗೆ ವಿಭಾಗಿಸಿದನು.
15:13b.LUK.015.013 ಕೆಲವೇ ದಿನಗಳಲ್ಲಿ ಕಿರೀ ಮಗನು ಎಲ್ಲವನ್ನೂ ಕೂಡಿಸಿಕೊಂಡು ದೂರದೇಶಕ್ಕೆ ಪ್ರಯಾಣಮಾಡಿ ಅಲ್ಲಿ ದುಂದುಗಾರನಾಗಿ ಜೀವಿಸಿ ತನ್ನ ಆಸ್ತಿಯನ್ನು ಹಾಳುಮಾಡಿಬಿಟ್ಟನು.
15:14b.LUK.015.014 ಅವನು ಎಲ್ಲವನ್ನು ವೆಚ್ಚ ಮಾಡಿದ ಮೇಲೆ ಆ ದೇಶದಲ್ಲಿ ಘೋರವಾದ ಬರ ಉಂಟಾಯಿತು. ಹೀಗೆ ಅವನು ಕೊರತೆ ಪಡಲಾರಂಭಿಸಿದನು.
15:15b.LUK.015.015 ಆಗ ಅವನು ಹೋಗಿ ಆ ದೇಶದ ನಿವಾಸಿಯಾಗಿದ್ದವನೊಂದಿಗೆ ಸೇರಿ ಕೊಂಡನು; ಆ ಮನುಷ್ಯನು ಹಂದಿಗಳನ್ನು ಮೇಯಿಸು ವದಕ್ಕೆ ಅವನನ್ನು ತನ್ನ ಹೊಲಗಳಿಗೆ ಕಳುಹಿಸಿದನು.ಅವನು ಹಂದಿಗಳು ತಿನ್ನುತ್ತಿದ್ದ ಹೊಟ್ಟಿನಿಂದ ಲಾದರೂ ತನ್ನ ಹೊಟ್ಟೆಯನ್ನು ತುಂಬಿಸಿಕೊಳ್ಳುವದಕ್ಕೆ ಇಷ್ಟಪಟ್ಟನು. ಆದರೆ
15:16b.LUK.015.016 ಅವನು ಹಂದಿಗಳು ತಿನ್ನುತ್ತಿದ್ದ ಹೊಟ್ಟಿನಿಂದ ಲಾದರೂ ತನ್ನ ಹೊಟ್ಟೆಯನ್ನು ತುಂಬಿಸಿಕೊಳ್ಳುವದಕ್ಕೆ ಇಷ್ಟಪಟ್ಟನು. ಆದರೆ ಯಾವನೂ ಅವನಿಗೆ ಕೊಡಲಿಲ್ಲ.
15:17b.LUK.015.017 ಅವನಿಗೆ ಬುದ್ದಿ ಬಂದಾಗ ಅವನು--ನನ್ನ ತಂದೆಯ ಎಷ್ಟೋ ಕೂಲಿಯಾಳುಗಳಿಗೆ ಸಾಕಾಗಿ ಉಳಿಯುವಷ್ಟು ಆಹಾರವಿದೆಯಲ್ಲಾ! ನಾನಾದರೋ ಹಸಿವೆಯಿಂದ ಸಾಯುತ್ತಿದ್ದೇನೆ.
15:18b.LUK.015.018 ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ--ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪಮಾಡಿದ್ದೇನೆ;
15:19b.LUK.015.019 ಇನ್ನೆಂದಿಗೂ ನಾನು ನಿನ್ನ ಮಗನೆಂದು ಕರೆಯಲ್ಪಡುವದಕ್ಕೆ ಯೋಗ್ಯನಲ್ಲ; ನನ್ನನ್ನು ನಿನ್ನ ಕೂಲಿಯಾಳುಗಳಲ್ಲಿ ಒಬ್ಬನಂತೆ ಮಾಡು ಅನ್ನುವೆನು ಎಂದು ಅಂದುಕೊಂಡು
15:20b.LUK.015.020 ಎದ್ದು ತನ್ನ ತಂದೆಯ ಬಳಿಗೆ ಬಂದನು. ಆದರೆ ಅವನು ಇನ್ನೂ ಬಹಳ ದೂರದಲ್ಲಿರುವಾಗಲೇ ಅವನ ತಂದೆಯು ಅವನನ್ನು ನೋಡಿ ಕನಿಕರಪಟ್ಟು ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಮುದ್ದಿಟ್ಟನು.
15:21b.LUK.015.021 ಮಗನು ಅವನಿಗೆ--ಅಪ್ಪಾ, ನಾನು ಪರಲೋಕಕ್ಕೆ ವಿರೋಧ ವಾಗಿಯೂ ನಿನ್ನ ದೃಷ್ಟಿಯಲ್ಲಿಯೂ ಪಾಪ ಮಾಡಿದ್ದೇನೆ; ನಿನ್ನ ಮಗನೆನಿಸಿಕೊಳ್ಳುವದಕ್ಕೆ ಇನ್ನೆಂದಿಗೂ ನಾನು ಯೋಗ್ಯನಲ್ಲ ಅಂದನು.
15:22b.LUK.015.022 ಆದರೆ ತಂದೆಯು ತನ್ನ ಸೇವಕರಿಗೆ--ಶ್ರೇಷ್ಠವಾದ ನಿಲುವಂಗಿಯನ್ನು ತಂದು ಇವನಿಗೆ ತೊಡಿಸಿರಿ; ಇವನ ಕೈಗೆ ಉಂಗುರವನ್ನೂ ಪಾದಗಳಿಗೆ ಕೆರಗಳನ್ನೂ ಹಾಕಿರಿ;
15:23b.LUK.015.023 ಇದಲ್ಲದೆ ಕೊಬ್ಬಿದ ಆ ಕರುವನ್ನು ಇಲ್ಲಿ ತಂದು ವಧಿಸಿರಿ; ನಾವು ಉಂಡು ಸಂತೋಷಪಡೋಣ;
15:24b.LUK.015.024 ಯಾಕಂದರೆ ಈ ನನ್ನ ಮಗನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋಗಿದ್ದನು, ಈಗ ಸಿಕ್ಕಿದ್ದಾನೆ ಎಂದು ಹೇಳಿದನು; ಹೀಗೆ ಅವರು ಸಂತೋಷ ಪಡಲಾರಂಭಿಸಿದರು.
15:25b.LUK.015.025 ಆಗ ಹಿರೀಮಗನು ಹೊಲದಲ್ಲಿದ್ದನು; ಅವನು ಮನೆಯ ಸವಿಾಪಕ್ಕೆ ಬರುತ್ತಿದ್ದಾಗ ವಾದ್ಯವನ್ನೂ ನಾಟ್ಯವನ್ನೂ ಕೇಳಿಸಿಕೊಂಡನು.
15:26b.LUK.015.026 ಅವನು ಸೇವಕರಲ್ಲಿ ಒಬ್ಬನನ್ನು ಕರೆದು ಇವುಗಳು ಏನೆಂದು ಕೇಳಿದನು.
15:27b.LUK.015.027 ಆ ಸೇವಕನು ಅವನಿಗೆ--ನಿನ್ನ ತಮ್ಮನು ಬಂದಿದ್ದಾನೆ; ನಿನ್ನ ತಂದೆಯು ಅವನನ್ನು ಸುರಕ್ಷಿತವಾಗಿ ಸೌಖ್ಯದಲ್ಲಿ ಸ್ವೀಕರಿಸಿದ್ದರಿಂದ ಆ ಕೊಬ್ಬಿದ ಕರುವನ್ನು ಕೊಯ್ಸಿದ್ದಾನೆ ಅಂದನು.
15:28b.LUK.015.028 ಅದಕ್ಕೆ ಅವನು ಕೋಪಗೊಂಡು ಒಳಗೆ ಹೋಗಲೊಲ್ಲದೆ ಇದ್ದನು. ಆದಕಾರಣ ಅವನ ತಂದೆಯು ಹೊರಗೆ ಬಂದು ಅವನನ್ನು ಬೇಡಿ ಕೊಂಡನು.
15:29b.LUK.015.029 ಆದರೆ ಅವನು ಪ್ರತ್ಯುತ್ತರವಾಗಿ ತನ್ನ ತಂದೆಗೆ--ಇಗೋ, ಇಷ್ಟು ವರುಷಗಳ ವರೆಗೆ ನಾನು ನಿನ್ನ ಸೇವೆ ಮಾಡುತ್ತಿದ್ದೇನೆ, ನಾನು ನಿನ್ನ ಅಪ್ಪಣೆ ಯನ್ನು ಎಂದಾದರೂ ವಿಾರಲಿಲ್ಲ; ಆದಾಗ್ಯೂ ನಾನು ನನ್ನ ಸ್ನೇಹಿತರೊಂದಿಗೆ ಸಂತೋಷಪಡುವದಕ್ಕಾಗಿ ನೀನ
15:30b.LUK.015.030 ಆದರೆ ನಿನ್ನ ಬದುಕನ್ನು ಸೂಳೆಯ ರೊಂದಿಗೆ ನುಂಗಿಬಿಟ್ಟ ಈ ನಿನ್ನ ಮಗನು ಬಂದ ಕೂಡಲೆ ಅವನಿಗೋಸ್ಕರ ಕೊಬ್ಬಿದ ಕರುವನ್ನು ನೀನು ಕೊಯ್ಸಿದ್ದೀ ಅಂದನು.
15:31b.LUK.015.031 ಆಗ ಅವನು--ಮಗನೇ, ನೀನು ಯಾವಾಗಲೂ ನನ್ನ ಸಂಗಡ ಇದ್ದೀ, ನನಗಿರುವ ದೆಲ್ಲವೂ ನಿನ್ನದೇ.ಆದರೆ ಈ ನಿನ್ನ ತಮ್ಮನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋದ ವನಾಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಸಂತೋ ಷಿಸಿ ಆನಂದಪಡುವದು ಯುಕ್ತವಾದದ್ದೇ ಎಂದು ಹೇಳಿದನು ಅಂದನು.
15:32b.LUK.015.032 ಆದರೆ ಈ ನಿನ್ನ ತಮ್ಮನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋದ ವನಾಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಸಂತೋ ಷಿಸಿ ಆನಂದಪಡುವದು ಯುಕ್ತವಾದದ್ದೇ ಎಂದು ಹೇಳಿದನು ಅಂದನು.
16
16:1b.LUK.016.001 ತರುವಾಯ ಆತನು ತನ್ನ ಶಿಷ್ಯರಿಗೂ
16:2b.LUK.016.002 ಆಗ ಅವನು ಆ ಮನೆವಾರ್ತೆ ಯವನನ್ನು ಕರೆದು ಅವನಿಗೆ--ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವದು? ಮನೆವಾರ್ತೆಯ ನಿನ್ನ ಲೆಕ್ಕವನ್ನು ಒಪ್ಪಿಸು; ಯಾಕಂದರೆ ನೀನು ಇನ್ನು ಮೇಲೆ ಮನೆವಾರ್ತೆಯವನಾಗಿರುವದಕ್ಕಾಗುವದಿಲ್ಲ ಅಂದನು.
16:3b.LUK.016.003 ಆಗ ಆ ಮನೆವಾರ್ತೆಯವನು ತನ್ನೊಳಗೆ--ನಾನೇನು ಮಾಡಲಿ? ಯಾಕಂದರೆ ನನ್ನ ಯಜಮಾನನು ನನ್ನನ್ನು ಮನೆವಾರ್ತೆಯ ಕೆಲಸದಿಂದ ತೆಗೆದುಬಿಡು ತ್ತಾನೆ; ನಾನು ಅಗೆಯಲಾರೆನು, ಭಿಕ್ಷೆ ಬೇಡುವದಕ್ಕೆ ನಾನು ನಾಚಿಕೊಳ್ಳುತ್ತೇನೆ.
16:4b.LUK.016.004 ಮನೆವಾರ್ತೆಯ ಕೆಲಸ ದಿಂದ ನನ್ನನ್ನು ತೆಗೆದ ಮೇಲೆ ಅವರು ನನ್ನನ್ನು ತಮ್ಮ ಮನೆಗಳಲ್ಲಿ ಸೇರಿಸಿಕೊಳ್ಳುವಂತೆ ನಾನು ಮಾಡಬೇಕಾ ದದ್ದನ್ನು ನಿರ್ಧರಿಸಿದ್ದೇನೆ ಎಂದು ಅಂದುಕೊಂಡನು.
16:5b.LUK.016.005 ಹೀಗೆ ಅವನು ತನ್ನ ಯಜಮಾನನ ಸಾಲಗಾರರಲ್ಲಿ ಪ್ರತಿಯೊಬ್ಬನನ್ನು ಕರೆದು ಮೊದಲನೆಯವನಿಗೆ--ನೀನು ನನ್ನ ಯಜಮಾನನಿಗೆ ಸಲ್ಲಿಸಬೇಕಾದದ್ದು ಎಷ್ಟು ಎಂದು ಕೇಳಲು
16:6b.LUK.016.006 ಅವನು--ಒಂದು ನೂರು ಅಳತೆ ಎಣ್ಣೆ ಅಂದನು. ಆಗ ಅವನು--ನಿನ್ನ ಬೆಲೆ ಪಟ್ಟಿಯನ್ನು ತೆಗೆದುಕೋ, ಮತ್ತು ಬೇಗ ಕೂತುಕೊಂಡು ಐವತ್ತು ಎಂದು ಬರೆ ಎಂದು ಅವನಿಗೆ ಹೇಳಿದನು.
16:7b.LUK.016.007 ಇದಲ್ಲದೆ ಅವನು ಮತ್ತೊಬ್ಬನಿಗೆ--ನೀನು ಸಲ್ಲಿಸಬೇಕಾದದ್ದು ಎಷ್ಟು? ಅನ್ನಲು ಅವನು--ಒಂದು ನೂರು ಅಳತೆ ಗೋಧಿ ಅಂದನು. ಆಗ ಅವನು--ನಿನ್ನ ಬೆಲೆ ಪಟ್ಟಿ ಯನ್ನು ತೆಗೆದುಕೊಂಡು ಎಂಭತ್ತು ಎಂದು ಬರೆ ಅಂದನು.
16:8b.LUK.016.008 ಆಗ ಯಜಮಾನನು ಅನ್ಯಾಯಗಾರನಾದ ಆ ಮನೆವಾರ್ತೆಯವನು ಜಾಣತನ ಮಾಡಿದನೆಂದು ಅವನನ್ನು ಹೊಗಳಿದನು; ಯಾಕಂದರೆ ಈ ಲೋಕದ ಮಕ್ಕಳು ತಮ್ಮ ಸಂತತಿಯವರಲ್ಲಿ ಬೆಳಕಿನ ಮಕ್ಕಳಿಗಿಂತ ಜಾಣರಾಗಿದ್ದಾರೆ.
16:9b.LUK.016.009 ನಾನು ನಿಮಗೆ ಹೇಳುವದೇ ನಂದರೆ--ಅನ್ಯಾಯದ ಧನದಿಂದ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ; ಅದು ನಿಮ್ಮನ್ನು ಬಿಟ್ಟು ಹೋದಾಗ ಅವರು ನಿಮ್ಮನ್ನು ನಿತ್ಯವಾದ ನಿವಾಸಗಳಲ್ಲಿ ಸೇರಿಸಿ ಕೊಳ್ಳುವರು.
16:10b.LUK.016.010 ಯಾವನು ಸ್ವಲ್ಪವಾದದ್ದರಲ್ಲಿ ನಂಬಿಗಸ್ತ ನಾಗಿರುವನೋ ಅವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗಿದ್ದಾನೆ; ಯಾವನು ಸ್ವಲ್ಪವಾದದ್ದರಲ್ಲಿ ಅನ್ಯಾಯಗಾರನಾಗಿರುವನೋ ಅವನು ಬಹಳವಾದದ್ದ ರಲ್ಲಿಯೂ ಅನ್ಯಾಯಗಾರನಾಗಿದ್ದಾನೆ.
16:11b.LUK.016.011 ಆದದರಿಂದ ಅನ್ಯಾಯವಾದ ಧನದಲ್ಲಿ ನೀವು ನಂಬಿಗಸ್ತರಾಗಿರದಿದ್ದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸುವರು?
16:12b.LUK.016.012 ಇದಲ್ಲದೆ ಮತ್ತೊಬ್ಬನದರಲ್ಲಿ ನೀವು ನಂಬಿಗಸ್ತರಾಗಿರದಿದ್ದರೆ ನಿಮ್ಮ ಸ್ವಂತದ್ದನ್ನು ನಿಮಗೆ ಯಾರು ಕೊಡುವರು?
16:13b.LUK.016.013 ಯಾವ ಸೇವಕನೂ ಇಬ್ಬರು ಯಜಮಾನರನ್ನು ಸೇವಿಸಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಮತ್ತೊಬ್ಬನನ್ನು ಪ್ರೀತಿ ಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು; ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ ಅಂದನು.
16:14b.LUK.016.014 ಆಗ ಲೋಭಿ ಗಳಾದ ಫರಿಸಾಯರು ಸಹ ಇವೆಲ್ಲವುಗಳನ್ನು ಕೇಳಿ ಆತನಿಗೆ ಪರಿಹಾಸ್ಯ ಮಾಡಿದರು.
16:15b.LUK.016.015 ಆಗ ಆತನು ಅವರಿಗೆ--ಮನುಷ್ಯರ ಮುಂದೆ ನೀತಿವಂತರಾಗಿ ಮಾಡಿ ಕೊಳ್ಳುವವರು ನೀವೇ; ಆದರೆ ದೇವರು ನಿಮ್ಮ ಹೃದಯಗಳನ್ನು ತಿಳಿದಿದ್ದಾನೆ; ಯಾಕಂದರೆ ಮನುಷ್ಯರಲ್ಲಿ ಯಾವದು ಶ್ರೇಷ್ಠವೆಂದು ಎಣಿಸಲ್ಪ ಡುತ್ತದೋ ಅದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.
16:16b.LUK.016.016 ನ್ಯಾಯ ಪ್ರಮಾಣವೂ ಪ್ರವಾದನೆಗಳೂ ಯೋಹಾ ನನವರೆಗೆ ಇದ್ದವು; ದೇವರ ರಾಜ್ಯವು ಅಂದಿನಿಂದ ಸಾರಲ್ಪಡುತ್ತಾ ಇದೆ, ಪ್ರತಿಯೊಬ್ಬನು ಬಲವಂತದಿಂದ ಅದರೊಳಗೆ ನುಗ್ಗುತ್ತಾನೆ.
16:17b.LUK.016.017 ನ್ಯಾಯಪ್ರಮಾಣದ ಒಂದು ಗುಡುಸಾದರೂ ಬಿದ್ದು ಹೋಗುವದಕ್ಕಿಂತ ಆಕಾಶವೂ ಭೂಮಿಯೂ ಅಳಿದು ಹೋಗುವದು ಸುಲಭ.
16:18b.LUK.016.018 ಯಾವನು ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರ ಮಾಡುತ್ತಾನೆ; ಯಾವನು ಗಂಡ ಬಿಟ್ಟವಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರಮಾಡುತ್ತಾನೆ.
16:19b.LUK.016.019 ಊದಾಬಣ್ಣದ ವಸ್ತ್ರಗಳನ್ನೂ ನಯವಾದ ನಾರು ಮಡಿಯನ್ನೂ ಧರಿಸಿಕೊಂಡು ಪ್ರತಿದಿನವೂ ಸಮೃದ್ಧಿ ಯಾಗಿ ಭೋಜನಮಾಡುತ್ತಿದ್ದ ಒಬ್ಬಾನೊಬ್ಬ ಐಶ್ವರ್ಯ ವಂತನಿದ್ದನು.
16:20b.LUK.016.020 ಅವನ ಬಾಗಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು; ಅವನು ಮೈ ತುಂಬಾ ಹುಣ್ಣೆದ್ದವನು.
16:21b.LUK.016.021 ಐಶ್ವರ್ಯವಂತನ ಮೇಜಿ ನಿಂದ ಬೀಳುವ (ರೊಟ್ಟಿ) ತುಂಡುಗಳನ್ನು ತಿನ್ನುವದಕ್ಕೆ ಅವನು ಆಶೆಪಡುತ್ತಿದ್ದನು; ಇದಲ್ಲದೆ ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು.
16:22b.LUK.016.022 ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು.
16:23b.LUK.016.023 ಆಗ ಅವನು ಪಾತಾಳದೊಳಗೆ ಯಾತನೆಯಲ್ಲಿ ದ್ದವನಾಗಿ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಯಲ್ಲಿದ್ದ ಲಾಜರನನೂ ನೋಡಿದನು.
16:24b.LUK.016.024 ಅವನು--ತಂದೆಯಾದ ಅಬ್ರಹಾ ಮನೇ, ನನ್ನ ಮೇಲೆ ಕರುಣೆ ಇಟ್ಟು ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡುವಂತೆ ಅವನನ್ನು ಕಳುಹಿಸು; ಯಾಕಂದರೆ ನಾನು ಈ ಉರಿಯಲ್ಲಿ ಯಾತನೆಪಡುತ್ತಾ ಇದ್ದೇನೆ ಎಂದು ಕೂಗಿ ಹೇಳಿದನು.
16:25b.LUK.016.025 ಆದರೆ ಅಬ್ರಹಾ ಮನು--ಮಗನೇ, ನೀನು ನಿನ್ನ ಜೀವಿತಕಾಲದಲ್ಲಿ ನಿನ್ನ ಒಳ್ಳೆಯವುಗಳನ್ನು ಹೊಂದಿದಿ; ಅದೇ ರೀತಿಯಲ್ಲಿ ಲಾಜರನು ಕೆಟ್ಟವುಗಳನ್ನು ಹೊಂದಿದ್ದನ್ನು ನೆನಪಿಗೆ ತಂದುಕೋ. ಆದರೆ ಈಗ ಅವನು ಆದರಣೆ ಹೊಂದುತ್ತಾ ಇದ್ದಾನೆ; ನೀನು ಯಾತನೆಪಡುತ್ತಾ ಇದ್ದೀ.
16:26b.LUK.016.026 ಇದಲ್ಲದೆ ಇಲ್ಲಿಂದ ನಿಮ್ಮ ಕಡೆಗೆ ದಾಟ ಬೇಕೆಂದಿರುವವರು ದಾಟದ ಹಾಗೆಯೂ ಅಲ್ಲಿಂದ ನಮ್ಮ ಕಡೆಗೆ ಬರಬೇಕೆಂದಿರುವವರು ಬಾರದಂತೆಯೂ ನಮಗೂ ನಿಮಗೂ ನಡುವೆ ಒಂದು ದೊಡ್ಡ ಅಗಾಧ ಸ್ಥಾಪಿಸಿಯದೆ ಅಂದನು.
16:27b.LUK.016.027 ಆಗ ಅವನು--ಅಪ್ಪಾ, ಹಾಗಾದರೆ ನೀನು ಅವನನ್ನು ನನ್ನ ತಂದೆಯ ಮನೆಗೆ ಕಳುಹಿಸಬೇಕೆಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ.
16:28b.LUK.016.028 ನನಗೆ ಐದುಮಂದಿ ಸಹೋದರರಿದ್ದಾರೆ; ಅವರು ಸಹ ಈ ಯಾತನೆಯ ಸ್ಥಳಕ್ಕೆ ಬಾರದ ಹಾಗೆ ಇವನು ಅವರಿಗೆ ಸಾಕ್ಷಿ ಕೊಡಲಿ ಅಂದನು.
16:29b.LUK.016.029 ಅದಕ್ಕೆ ಅಬ್ರಹಾಮನು ಅವನಿಗೆ--ಅವರಿಗೆ ಮೋಶೆಯೂ ಪ್ರವಾದಿಗಳೂ ಇದ್ದಾರೆ. ಅವರು ಹೇಳಿದ್ದನ್ನು ಅವರು ಕೇಳಲಿ ಅಂದನು.
16:30b.LUK.016.030 ಆಗ ಅವನು--ಹಾಗಲ್ಲ, ತಂದೆ ಯಾದ ಅಬ್ರಹಾಮನೇ, ಸತ್ತವರೊಳಗಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಮಾನಸಾಂತರ ಪಡುವರು ಅಂದನು.ಆದರೆ ಅವನು--ಅವರು ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನು ಕೇಳದೆ ಹೋದರೆ ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವದಿಲ್ಲ ಎಂದು ಅವನಿಗೆ ಹೇಳಿದನು.
16:31b.LUK.016.031 ಆದರೆ ಅವನು--ಅವರು ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನು ಕೇಳದೆ ಹೋದರೆ ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವದಿಲ್ಲ ಎಂದು ಅವನಿಗೆ ಹೇಳಿದನು.
17
17:1b.LUK.017.001 ತರುವಾಯ ಆತನು ಶಿಷ್ಯರಿಗೆ-- ಆಟಂಕಗಳು ಬಾರದಿರುವದು ಅಸಾಧ್ಯ; ಆದರೆ ಯಾವನಿಂದ ಅವು ಬರುವವೋ ಅವನಿಗೆ ಅಯ್ಯೋ!
17:2b.LUK.017.002 ಅವನು ಈ ಚಿಕ್ಕವರಲ್ಲಿ ಒಬ್ಬನಿಗೆ ಆಟಂಕ ಪಡಿಸುವದಕ್ಕಿಂತ ಅವನ ಕೊರಳಿಗೆ ಬೀಸುವ ಕಲ್ಲನ್ನು ನೇತುಹಾಕಿ ಅವನನ್ನು ಸಮುದ್ರದೊಳಗೆ ಬಿಸಾಡು ವದು ಅವನಿಗೆ ಉತ್ತಮವಾಗಿದೆ.
17:3b.LUK.017.003 ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯನ್ನು ತೆಗೆದುಕೊಳ್ಳಿರಿ; ನಿನ ಸಹೋದರನು ನಿನಗೆ ವಿರೋಧವಾಗಿ ತಪ್ಪು ಮಾಡಿದರೆ ಅವನನ್ನು ಗದರಿಸು; ಅವನು ಮಾನಸಾಂತರಪಟ್ಟರೆ ಅವನನ್ನು ಕ್ಷಮಿಸು.
17:4b.LUK.017.004 ಅವನು ಒಂದು ದಿನದಲ್ಲಿ ಏಳು ಸಾರಿ ನಿನಗೆ ವಿರೋಧವಾಗಿ ತಪ್ಪು ಮಾಡಿ ಅದೇ ದಿನದಲ್ಲಿ ಏಳು ಸಾರಿ ನಿನ್ನ ಕಡೆಗೆ ತಿರುಗಿಕೊಂಡು-- ನಾನು ಮಾನಸಾಂತರಪಡುತ್ತೇನೆ ಎಂದು ಹೇಳಿದರೆ ನೀನು ಅವನನ್ನು ಕ್ಷಮಿಸಬೇಕು ಅಂದನು.
17:5b.LUK.017.005 ಆಗ ಅಪೋಸ್ತಲರು ಕರ್ತನಿಗೆ--ನಮ್ಮ ನಂಬಿಕೆ ಯನ್ನು ಹೆಚ್ಚಿಸು ಅಂದರು.
17:6b.LUK.017.006 ಕರ್ತನು ಅವರಿಗೆ-- ನಿಮಗೆ ಸಾಸಿವೆ ಕಾಳಿನಷ್ಟು ನಂಬಿಕೆ ಇರುವದಾದರೆ ನೀವು ಈ ಆಲದ ಮರಕ್ಕೆ--ನೀನು ಬೇರು ಸಹಿತ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ನಾಟಿಕೋ ಎಂದು ಹೇಳುವದಾದರೆ ಅದು ನಿಮಗೆ ವಿಧೇಯ ವಾಗುವದು.
17:7b.LUK.017.007 ಆದರೆ ನಿಮ್ಮಲ್ಲಿ ಒಬ್ಬನಿಗೆ ಉಳುವ ಇಲ್ಲವೆ ದನಕರು ಕಾಯುವ ಆಳಿರಲಾಗಿ ಅವನು ಹೊಲದಿಂದ ಬಂದಾ ಗಲೇ ಅವನಿಗೆ--ಹೋಗಿ ಊಟಕ್ಕೆ ಕೂತುಕೋ ಎಂದು ಹೇಳುವದುಂಟೇ?
17:8b.LUK.017.008 ಹಾಗೆ ಹೇಳದೆ--ನಾನು ಊಟ ಮಾಡುವಂತೆ ನೀನು ನಿನ್ನ ನಡುವನ್ನು ಕಟ್ಟಿ ಕೊಂಡು ನಾನು ತಿಂದು ಕುಡಿಯುವ ತನಕ ನನ್ನ ಸೇವೆ ಮಾಡು; ತರುವಾಯ ನೀನು ತಿಂದು ಕುಡಿ ಎಂದು ಅವನಿಗೆ ಹೇಳುವದಿಲ್ಲವೇ?
17:9b.LUK.017.009 ತನಗೆ ಅಪ್ಪಣೆ ಕೊಟ್ಟವುಗಳನ್ನು ಆ ಆಳು ಮಾಡಿದರೆ (ಯಜಮಾ ನನು) ಅವನಿಗೆ ಕೃತಜ್ಞತೆಯುಳ್ಳವನಾಗಿರುವನೋ? ನಾನು ನೆನಸುವದಿಲ್ಲ.
17:10b.LUK.017.010 ಅದೇ ರೀತಿಯಾಗಿ ನಿಮಗೆ ಆಜ್ಞಾಪಿಸಿದವುಗಳನ್ನೆಲ್ಲಾ ನೀವು ಮಾಡಿದ ಮೇಲೆ-- ನಾವು ನಿಷ್ಪ್ರಯೋಜಕರಾದ ಆಳುಗಳು; ಯಾಕಂದರೆ ನಾವು ಮಾಡಬೇಕಾದದ್ದನ್ನೇ ಮಾಡಿದ್ದೇವೆ ಎಂದು ನೀವು ಅನ್ನಿರಿ ಎಂದು ಹೇಳಿದನು.
17:11b.LUK.017.011 ಇದಾದ ಮೇಲೆ ಆತನು ಯೆರೂಸಲೇಮಿಗೆ ಹೋಗುತ್ತಿರುವಾಗ ಸಮಾರ್ಯ ಮತ್ತು ಗಲಿಲಾಯಗಳ ಮಧ್ಯದಲ್ಲಿ ಹಾದುಹೋದನು.
17:12b.LUK.017.012 ಆತನು ಒಂದಾ ನೊಂದು ಹಳ್ಳಿಯನ್ನು ಪ್ರವೇಶಿಸಿದಾಗ ಹತ್ತು ಮಂದಿ ಕುಷ್ಠರೋಗಿಗಳು ದೂರದಲ್ಲಿ ನಿಂತು ಆತನನ್ನು ಸಂಧಿಸಿ ದರು.
17:13b.LUK.017.013 ಅವರು ತಮ್ಮ ಸ್ವರವೆತ್ತಿ--ಯೇಸುವೇ,ಒಡೆಯನೇ, ನಮ್ಮ ಮೇಲೆ ಕರುಣೆಯಿಡು ಎಂದು ಕೂಗಿ ಹೇಳಿದರು.
17:14b.LUK.017.014 ಆತನು ಅವರನ್ನು ನೋಡಿ ಅವರಿಗೆ--ಹೋಗಿ ಯಾಜಕರಿಗೆ ನಿಮ್ಮನ್ನು ತೋರಿಸಿ ಕೊಳ್ಳಿರಿ ಅಂದನು. ಅವರು ಹೋಗುತ್ತಿರುವಾಗಲೇ ಶುದ್ಧರಾದರು.
17:15b.LUK.017.015 ಅವರಲ್ಲಿ ಒಬ್ಬನು ತಾನು ಸ್ವಸ್ಥ ವಾದದ್ದನ್ನು ನೋಡಿ ಹಿಂದಿರುಗಿ ಬಂದು ಮಹಾ ಶಬ್ದದಿಂದ ದೇವರನ್ನು ಮಹಿಮೆಪಡಿಸುತ್ತಾ
17:16b.LUK.017.016 ಆತನ ಪಾದಕ್ಕೆ ಅಡ್ಡಬಿದ್ದು ಆತನಿಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸಿದನು; ಅವನು ಸಮಾರ್ಯದವನಾಗಿದ್ದನು.
17:17b.LUK.017.017 ಆದರೆ ಯೇಸು ಅವನಿಗೆ--ಹತ್ತು ಮಂದಿ ಶುದ್ಧರಾಗ ಲಿಲ್ಲವೇ. ಆದರೆ ಆ ಒಂಭತ್ತು ಮಂದಿ ಎಲ್ಲಿ?
17:18b.LUK.017.018 ದೇವ ರನ್ನು ಮಹಿಮೆಪಡಿಸುವದಕ್ಕೆ ಹಿಂದಿರುಗಿದವರಲ್ಲಿ ಈ ಅನ್ಯನ ಹೊರತು ಯಾರೂ ಕಾಣಿಸಲಿಲ್ಲ ಎಂದು ಹೇಳಿ
17:19b.LUK.017.019 ಅವನಿಗೆ--ಎದ್ದು ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿಯದೆ ಅಂದನು.
17:20b.LUK.017.020 ದೇವರ ರಾಜ್ಯವು ಯಾವಾಗ ಬರುವದೆಂದು ಫರಿಸಾಯರು ಆತನನ್ನು ಕೇಳಲು ಆತನು ಅವರಿಗೆ ಪ್ರತ್ಯುತ್ತರವಾಗಿ--ದೇವರ ರಾಜ್ಯವು ಪ್ರತ್ಯಕ್ಷವಾಗಿ ಬರುವದಿಲ್ಲ.
17:21b.LUK.017.021 ಇದಲ್ಲದೆ--ಇಗೋ, ಇಲ್ಲಿದೆ! ಇಲ್ಲವೆ ಅಗೋ, ಅಲ್ಲಿದೆ ಎಂದು ಅವರು ಹೇಳುವದಕ್ಕಾಗು ವದಿಲ್ಲ; ಯಾಕಂದರೆ ಇಗೋ, ದೇವರ ರಾಜ್ಯವು ನಿಮ್ಮೊಳಗೆ ಇದೆ ಅಂದನು.
17:22b.LUK.017.022 ಆತನು ತನ್ನ ಶಿಷ್ಯರಿಗೆ--ಮನುಷ್ಯಕುಮಾರನ ದಿವಸಗಳಲ್ಲಿ ಒಂದನ್ನು ನೋಡಬೇಕೆಂದು ನೀವು ಅಪೇಕ್ಷಿಸಿದರೂ ಅದನ್ನು ನೋಡದಂಥ ದಿನಗಳು ಬರುವವು.
17:23b.LUK.017.023 ಅವರು ನಿಮಗೆ--ಇಲ್ಲಿ ನೋಡಿರಿ ಇಲ್ಲವೆ ಅಲ್ಲಿ ನೋಡಿರಿ ಎಂದು ಹೇಳಿದರೆ ಅಲ್ಲಿಗೆ ಹೋಗಬೇಡಿರಿ ಇಲ್ಲವೆ ಅವರನ್ನು ಹಿಂಬಾಲಿಸಬೇಡಿರಿ.
17:24b.LUK.017.024 ಯಾಕಂದರೆ ಮಿಂಚು ಆಕಾಶದ ಒಂದು ಭಾಗದಲ್ಲಿ ಮಿಂಚಿ ಆಕಾಶದ ಮತ್ತೊಂದು ಭಾಗದಲ್ಲಿ ಹೇಗೆ ಹೊಳೆಯುತ್ತದೆಯೋ ಹಾಗೆಯೇ ಮನುಷ್ಯಕುಮಾರನು ತನ್ನ ದಿನದಲ್ಲಿ ಇರುವನು.
17:25b.LUK.017.025 ಆದರೆ ಆತನು ಮೊದಲು ಅನೇಕ ಶ್ರಮೆಗಳನ್ನು ಅನುಭವಿಸಿ ಈ ಸಂತತಿಯವರಿಂದ ತಿರಸ್ಕರಿಸಲ್ಪಡುವದು ಅಗತ್ಯವಾ ಗಿದೆ.
17:26b.LUK.017.026 ನೋಹನ ದಿವಸಗಳಲ್ಲಿ ಹೇಗೆ ಇತ್ತೋ ಅದೇ ರೀತಿಯಲ್ಲಿ ಮನುಷ್ಯಕುಮಾರನ ದಿವಸಗಳಲ್ಲಿಯೂ ಇರುವದು.
17:27b.LUK.017.027 ನೋಹನು ನಾವೆಯಲ್ಲಿ ಸೇರಿದ ದಿನದ ವರೆಗೂ ಅವರು ತಿನ್ನುತ್ತಾ ಕುಡಿಯುತ್ತಾ ಮದುವೆಮಾಡಿಕೊಳ್ಳುತ್ತಾ ಮತ್ತು ಮದುವೆಮಾಡಿ ಕೊಡುತ್ತಾ ಇದ್ದರು. ಆಗ ಜಲಪ್ರಳಯವು ಬಂದು ಅವರೆಲ್ಲರನ್ನು ನಾಶಮಾಡಿತ್ತು.
17:28b.LUK.017.028 ಅದೇ ಪ್ರಕಾರ ಲೋಟನ ದಿವಸಗಳಲ್ಲಿಯೂ ಇತ್ತು. ಅವರು ತಿನ್ನು ತ್ತಿದ್ದರು, ಕುಡಿಯುತ್ತಿದ್ದರು; ಅವರು ಕೊಂಡುಕೊಳ್ಳು ತ್ತಿದ್ದರು, ಮಾರುತ್ತಿದ್ದರು; ಅವರು ನೆಡುತ್ತಿದ್ದರು ಮತ್ತು ಕಟ್ಟುತ್ತಿದ್ದರು.
17:29b.LUK.017.029 ಆದರೆ ಲೋಟನು ಸೊದೋಮಿನಿಂದ ಹೊರಗೆ ಹೋದ ದಿನವೇ ಆಕಾಶದಿಂದ ಬೆಂಕಿಯೂ ಗಂಧಕವೂ ಸುರಿದು ಎಲ್ಲರನ್ನು ನಾಶಪಡಿಸಿದವು.
17:30b.LUK.017.030 ಮನುಷ್ಯಕುಮಾರನು ಪ್ರತ್ಯಕ್ಷನಾಗುವ ದಿನದಲ್ಲಿ ಹೀಗೆಯೇ ಇರುವದು.
17:31b.LUK.017.031 ಆ ದಿನದಲ್ಲಿ ಮನೆಯ ಮಾಳಿಗೆಯ ಮೇಲೆ ಇದ್ದವನು ಮನೆಯಲ್ಲಿದ್ದ ತನ್ನ ಸಾಮಾನುಗಳನ್ನು ತೆಗೆದುಕೊಳ್ಳಲು ಕೆಳಗಿಳಿದು ಬಾರ ದಿರಲಿ. ಹಾಗೆಯೇ ಹೊಲದಲ್ಲಿದ್ದವನು ಹಿಂದಿರುಗಿ ಬಾರದಿರಲಿ.
17:32b.LUK.017.032 ಲೋಟನ ಹೆಂಡತಿಯನ್ನು ಜ್ಞಾಪಕ ಮಾಡಿಕೊಳ್ಳಿರಿ.
17:33b.LUK.017.033 ಯಾವನು ತನ್ನ ಪ್ರಾಣವನ್ನು ಉಳಿಸಿಕೊಳ್ಳುವದಕ್ಕೆ ಪ್ರಯತ್ನಿಸುವನೋ ಅವನು ಅದನ್ನು ಕಳಕೊಳ್ಳುವನು; ಯಾವನು ತನ್ನ ಪ್ರಾಣವನ್ನು ಕಳಕೊಳ್ಳುವನೋ ಅವನು ಅದನ್ನು ಕಾಪಾಡಿಕೊಳ್ಳು ವನು.
17:34b.LUK.017.034 ಆ ರಾತ್ರಿಯಲ್ಲಿ ಇಬ್ಬರು ಒಂದೇ ಹಾಸಿಗೆ ಯಲ್ಲಿ ಇರುವರು; ಒಬ್ಬನು ತೆಗೆಯಲ್ಪಡುವನು; ಮತ್ತೊಬ್ಬನು ಬಿಡಲ್ಪಡುವನು.
17:35b.LUK.017.035 ಇಬ್ಬರು ಹೆಂಗಸರು ಜೊತೆಯಾಗಿ ಬೀಸುತ್ತಿರುವರು; ಒಬ್ಬಳು ತೆಗೆಯ ಲ್ಪಡುವಳು, ಮತ್ತೊಬ್ಬಳು ಬಿಡಲ್ಪಡುವಳು.
17:36b.LUK.017.036 ಇಬ್ಬರು ಹೊಲದಲ್ಲಿರುವರು; ಒಬ್ಬನು ತೆಗೆಯಲ್ಪಡುವನು, ಮತ್ತೊಬ್ಬನು ಬಿಡಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.ಆಗ ಅವರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಎಲ್ಲಿ ಎಂದು ಕೇಳಲು ಆತನು ಅವರಿಗೆ--ಹೆಣ ಎಲ್ಲಿದೆಯೋ ಅಲ್ಲಿ ಹದ್ದುಗಳು ಕೂಡಿಕೊಳ್ಳುವವು ಅಂದನು.
17:37b.LUK.017.037 ಆಗ ಅವರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಎಲ್ಲಿ ಎಂದು ಕೇಳಲು ಆತನು ಅವರಿಗೆ--ಹೆಣ ಎಲ್ಲಿದೆಯೋ ಅಲ್ಲಿ ಹದ್ದುಗಳು ಕೂಡಿಕೊಳ್ಳುವವು ಅಂದನು.
18
18:1b.LUK.018.001 ಜನರು ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥಿಸತಕ್ಕದ್ದೆಂದು ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು--
18:2b.LUK.018.002 ಒಂದಾನೊಂದು ಪಟ್ಟಣದಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು. ಅವನು ದೇವರಿಗೆ ಭಯಪಡದವನೂ ಮನುಷ್ಯರನ್ನು ಲಕ್ಷ್ಯ ಮಾಡದವನೂ ಆಗಿದ್ದನು.
18:3b.LUK.018.003 ಆ ಪಟ್ಟಣದಲ್ಲಿದ್ದ ಒಬ್ಬ ವಿಧವೆಯು ಅವನ ಬಳಿಗೆ ಬಂದು--ನನ್ನ ಪ್ರತಿ ವಾದಿಗೂ ನನಗೂ ನ್ಯಾಯತೀರಿಸು ಎಂದು ಹೇಳಿ ಕೊಳ್ಳುತ್ತಿದ್ದಳು.
18:4b.LUK.018.004 ಅವನು ಸ್ವಲ್ಪಕಾಲದವರೆಗೆ ಮನಸ್ಸಿಲ್ಲ ದವನಾಗಿದ್ದನು; ತರುವಾಯ ಅವನು ತನ್ನೊಳಗೆ--ನಾನು ದೇವರಿಗೆ ಭಯಪಡುವದಿಲ್ಲ, ಮನುಷ್ಯರನ್ನು ಲಕ್ಷ್ಯಮಾಡುವದೂ ಇಲ್ಲ.
18:5b.LUK.018.005 ಅದಾಗ್ಯೂ ಈ ವಿಧವೆಯು ನನಗೆ ತೊಂದರೆ ಕೊಟ್ಟು ಪದೇ ಪದೇ ನನ್ನ ಬಳಿಗೆ ಬಂದು ನನ್ನನ್ನು ದಣಿಸದಂತೆ ನಾನು ಅವಳಿಗೆ ನ್ಯಾಯತೀರಿಸುವೆನು ಎಂದು ಅಂದುಕೊಂಡನು.
18:6b.LUK.018.006 ಕರ್ತನು--ಈ ಅನ್ಯಾಯಗಾರನಾದ ನ್ಯಾಯಾಧಿ ಪತಿಯು ಅಂದುಕೊಂಡದ್ದನ್ನು ಕೇಳಿರಿ.
18:7b.LUK.018.007 ದೇವರಾದು ಕೊಂಡವರು ಆತನಿಗೆ ಹಗಲು ರಾತ್ರಿ ಮೊರೆಯಿಡು ವಾಗ ಆತನು ಅವರ ವಿಷಯದಲ್ಲಿ ಬಹಳವಾಗಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ?
18:8b.LUK.018.008 ಆತನು ಬೇಗನೆ ಅವರಿಗೆ ನ್ಯಾಯ ತೀರಿಸುವನೆಂದು ನಾನು ನಿಮಗೆ ಹೇಳುತ್ತೇನೆ. ಆದಾಗ್ಯೂ ಮನುಷ್ಯಕುಮಾರನು ಬಂದಾಗ ಭೂಮಿಯ ಮೇಲೆ ನಂಬಿಕೆಯನ್ನು ಕಾಣುವನೋ ಅಂದನು.
18:9b.LUK.018.009 ತಾವು ನೀತಿವಂತರೆಂದು ತಮ್ಮಲ್ಲಿಯೇ ಭರವಸ ವನ್ನಿಟ್ಟುಕೊಂಡು ಬೇರೆಯವರನ್ನು ಅಸಡ್ಡೆ ಮಾಡಿದ ಕೆಲವರಿಗೆ ಈ ಸಾಮ್ಯವನ್ನು ಹೇಳಿದನು.
18:10b.LUK.018.010 ಇಬ್ಬರು ಪ್ರಾರ್ಥನೆ ಮಾಡುವದಕ್ಕೆ ದೇವಾಲಯದೊಳಗೆ ಹೋದರು; ಒಬ್ಬನು ಫರಿಸಾಯನು, ಮತ್ತೊಬ್ಬನು ಸುಂಕದವನು.
18:11b.LUK.018.011 ಫರಿಸಾಯನು ನಿಂತುಕೊಂಡು ತನ್ನೊಳಗೆ ಹೀಗೆ ಪ್ರಾರ್ಥಿಸುತ್ತಾ--ದೇವರೇ, ಸುಲು ಕೊಳ್ಳುವವರೂ ಅನೀತಿವಂತರೂ ವ್ಯಭಿಚಾರಿಗಳೂ ಆಗಿರುವ ಮಿಕ್ಕಾದವರಂತೆ ಇಲ್ಲವೆ ಈ ಸುಂಕದವನ ಹಾಗೆ ನಾನು ಅಲ್ಲ, ಆದದರಿಂದ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ.
18:12b.LUK.018.012 ನಾನು ವಾರದಲ್ಲಿ ಎರಡು ಸಾರಿ ಉಪವಾಸ ಮಾಡುತ್ತೇನೆ; ನನಗಿರುವದೆ ಲ್ಲವುಗಳಲ್ಲಿ ದಶಾಂಶ ಕೊಡುತ್ತೇನೆ ಎಂದು ಹೇಳಿದನು.
18:13b.LUK.018.013 ಆದರೆ ಸುಂಕದವನು ದೂರದಲ್ಲಿ ನಿಂತುಕೊಂಡು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ತನ್ನ ಎದೆಯನ್ನು ಬಡುಕೊಳ್ಳುತ್ತಾ--ದೇವರು ಪಾಪಿ ಯಾದ ನನ್ನನ್ನು ಕರುಣಿಸಲಿ ಅಂದನು.
18:14b.LUK.018.014 ಇವನೇ ಫರಿಸಾಯನಿಗಿಂತ ನೀತಿವಂತನೆಂದು ನಿರ್ಣಯಿಸಲ್ಪಟ್ಟ ವನಾಗಿ ತನ್ನ ಮನೆಗೆ ಹೋದನು; ಯಾಕಂದರೆ ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
18:15b.LUK.018.015 ತರುವಾಯ ಚಿಕ್ಕಮಕ್ಕಳನ್ನು ಸಹ ಯೇಸು ಮುಟ್ಟುವಂತೆ ಜನರು ಅವುಗಳನ್ನು ಆತನ ಬಳಿಗೆ ತಂದಾಗ ಆತನ ಶಿಷ್ಯರು ಇದನ್ನು ನೋಡಿ ಅವರನು ಗದರಿಸಿದರು.
18:16b.LUK.018.016 ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು--ಚಿಕ್ಕ ಮಕ್ಕಳನ್ನು ನನ್ನ ಹತ್ತಿರಕ್ಕೆ ಬರುವಂತೆ ಬಿಡಿರಿ; ಅವುಗಳಿಗೆ ಅಡ್ಡಿ ಮಾಡಬೇಡಿರಿ; ಯಾಕಂದರೆ ದೇವರ ರಾಜ್ಯವು ಅಂಥವರದೇ.
18:17b.LUK.018.017 ಯಾವನಾದರೂ ಈ ಚಿಕ್ಕ ಮಗುವಿನಂತೆ ದೇವರ ರಾಜ್ಯವನ್ನು ಅಂಗೀಕರಿಸದಿರುವನೋ ಅವನು ಅದರೊಳಗೆ ಸೇರುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
18:18b.LUK.018.018 ಆಗ ಒಬ್ಬಾನೊಬ್ಬ ಅಧಿಕಾರಿಯು ಆತನಿಗೆ--ಒಳ್ಳೇ ಬೋಧಕನೇ, ನಾನು ನಿತ್ಯಜೀವವನ್ನು ಬಾಧ್ಯ ವಾಗಿ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಿದನು.
18:19b.LUK.018.019 ಅದಕ್ಕೆ ಯೇಸು ಅವನಿಗೆ--ನೀನು ನನ್ನನ್ನು ಒಳ್ಳೆಯವನೆಂದು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಒಳ್ಳೆಯವನು ಯಾವನೂ ಇಲ್ಲ.
18:20b.LUK.018.020 ವ್ಯಭಿಚಾರ ಮಾಡಬೇಡ, ನರಹತ್ಯ ಮಾಡ ಬೇಡ, ಕದಿಯಬೇಡ, ಸುಳ್ಳುಸಾಕ್ಷಿ ಹೇಳಬೇಡ, ನಿನ್ನ ತಂದೆಯನ್ನು ಮತ್ತು ನಿನ್ನ ತಾಯಿಯನ್ನು ಸನ್ಮಾನಿಸಬೇಕು ಎಂಬ ಆಜ್ಞೆಗಳನ್ನು ನೀನು ಬಲ್ಲವನಾಗಿದ್ದೀ ಅಂದನು.
18:21b.LUK.018.021 ಅದಕ್ಕವನು--ನನ್ನ ಬಾಲ್ಯದಿಂದ ನಾನು ಇವೆಲ್ಲವು ಗಳನ್ನು ಕೈಕೊಂಡಿದ್ದೇನೆ ಎಂದು ಹೇಳಿದನು.
18:22b.LUK.018.022 ಆಗ ಯೇಸು ಇವುಗಳನ್ನು ಕೇಳಿ ಅವನಿಗೆ--ಆದಾಗ್ಯೂ ನಿನಗೆ ಒಂದು ಕೊರತೆ ಇದೆ; ನಿನಗೆ ಇರುವದೆಲ್ಲವನ್ನು ಮಾರಿ ಬಡವರಿಗೆ ಹಂಚಿಕೊಡು; ಪರಲೋಕದಲ್ಲಿ ನಿನಗೆ ಸಂಪತ್ತು ಇರುವದು; ಬಂದು ನನ್ನನ್ನು ಹಿಂಬಾ ಲಿಸು ಅಂದನು.
18:23b.LUK.018.023 ಅವನು ಇದನ್ನು ಕೇಳಿ ಬಹಳ ದುಃಖವುಳ್ಳವನಾದನು; ಯಾಕಂದರೆ ಅವನು ಬಹಳ ಐಶ್ವರ್ಯವಂತನಾಗಿದ್ದನು.
18:24b.LUK.018.024 ಅವನು ಬಹಳ ವ್ಯಥೆಗೊಂಡದ್ದನ್ನು ಯೇಸು ನೋಡಿ--ಐಶ್ವರ್ಯ ವಂತರು ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ.
18:25b.LUK.018.025 ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ತೂರುವದು ಸುಲಭ ಎಂದು ಹೇಳಿದನು.
18:26b.LUK.018.026 ಇದನ್ನು ಕೇಳಿದವರು--ಹಾಗಾದರೆ ರಕ್ಷಣೆ ಹೊಂದುವವರು ಯಾರು? ಅಂದರು.
18:27b.LUK.018.027 ಅದಕ್ಕೆ ಆತನು--ಮನುಷ್ಯರಿಗೆ ಅಸಾಧ್ಯವಾದವುಗಳು ದೇವರಿಗೆ ಸಾಧ್ಯವಾಗಿವೆ ಎಂದು ಹೇಳಿದನು.
18:28b.LUK.018.028 ಆಗ ಪೇತ್ರನು--ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ ಎಂದು ಹೇಳಿದ್ದಕ್ಕೆ
18:29b.LUK.018.029 ಆತನು ಅವರಿಗೆ--ಒಬ್ಬನು ಮನೆ ಯನ್ನಾದರೂ ತಂದೆತಾಯಿಗಳನ್ನಾದರೂ ಸಹೋದರರನ್ನಾದರೂ ಹೆಂಡತಿಯನ್ನಾದರೂ ಇಲ್ಲವೆ ಮಕ್ಕಳ ನ್ನಾದರೂ ದೇವರ ರಾಜ್ಯಕ್ಕೋಸ್ಕರ ಬಿಟ್ಟುಬಿಡುವವನು
18:30b.LUK.018.030 ಈ ಕಾಲದಲ್ಲಿ ಅತ್ಯಧಿಕವಾದವುಗಳನ್ನೂ ಬರುವ ಲೋಕದಲ್ಲಿ ನಿತ್ಯಜೀವವನ್ನೂ ಹೊಂದಿಯೇ ಹೊಂದು ವನು ಎಂದು ನಾನು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ ಅಂದನು.
18:31b.LUK.018.031 ಇದಲ್ಲದೆ ಆತನು ಹನ್ನೆರಡು ಮಂದಿಯನ್ನು ಹತ್ತಿರಕ್ಕೆ ಕರೆದು ಅವರಿಗೆ--ಇಗೋ, ನಾವು ಯೆರೂಸ ಲೇಮಿಗೆ ಹೋಗುತ್ತೇವೆ; ಮನುಷ್ಯಕುಮಾರನ ವಿಷಯ ದಲ್ಲಿ ಪ್ರವಾದಿಗಳಿಂದ ಬರೆಯಲ್ಪಟ್ಟವುಗಳೆಲ್ಲವೂ ನೆರವೇರಬೇಕು.
18:32b.LUK.018.032 ಆತನು ಅನ್ಯಜನಗಳಿಗೆ ಒಪ್ಪಿಸಲ್ಪ ಡುವನು; ಅವರು ಆತನನ್ನು ಹಾಸ್ಯಮಾಡುವವರಾಗಿ ಅವಮಾನ ಮಾಡುತ್ತಾ ಆತನ ಮೇಲೆ ಉಗುಳುವರು.
18:33b.LUK.018.033 ಇದಲ್ಲದೆ ಅವರು ಆತನನ್ನು ಕೊರಡೆಗಳಿಂದ ಹೊಡೆದು ಕೊಲ್ಲುವರು. ಮೂರನೆಯ ದಿನದಲ್ಲಿ ಆತನು ತಿರಿಗಿ ಏಳುವನು ಅಂದನು.
18:34b.LUK.018.034 ಆದರೆ ಶಿಷ್ಯರು ಇವುಗಳಲ್ಲಿ ಒಂದನ್ನೂ ಗ್ರಹಿಸಲಿಲ್ಲ; ಈ ಮಾತು ಅವರಿಗೆ ಮರೆಯಾಗಿದ್ದದರಿಂದ ಆತನು ಹೇಳಿದವು ಗಳನ್ನು ಅವರು ತಿಳಿಯಲಿಲ್ಲ.
18:35b.LUK.018.035 ಇದಾದ ಮೇಲೆ ಆತನು ಯೆರಿಕೋವಿನ ಸವಿಾಪಕ್ಕೆ ಬಂದಾಗ ಒಬ್ಬಾನೊಬ್ಬ ಕುರುಡನು ದಾರಿಯ ಬದಿಯಲ್ಲಿ ಕೂತುಕೊಂಡು ಭಿಕ್ಷೆ ಬೇಡು ತ್ತಿದ್ದನು;
18:36b.LUK.018.036 ಜನಸಮೂಹವು ಹಾದುಹೋಗುವದನ್ನು ಇವನು ಕೇಳಿಸಿಕೊಂಡು ಅದೇನೆಂದು ವಿಚಾರಿಸಿದನು.
18:37b.LUK.018.037 ನಜರೇತಿನವನಾದ ಯೇಸು ಹಾದು ಹೋಗುತ್ತಿದ್ದಾ ನೆಂದು ಅವರು ಅವನಿಗೆ ಹೇಳಿದರು.
18:38b.LUK.018.038 ಆಗ ಅವನು--ಯೇಸುವೇ, ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಕೂಗಿಕೊಂಡನು.
18:39b.LUK.018.039 ಮುಂದೆ ಹೋಗುತ್ತಿದ್ದವರು ಅವನು ಸುಮ್ಮನಿರು ವಂತೆ ಅವನನ್ನು ಗದರಿಸಿದರು. ಆದರೂ ಅವನು--ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡನು.
18:40b.LUK.018.040 ಆಗ ಯೇಸು ನಿಂತುಕೊಂಡು ಅವನನ್ನು ತನ್ನ ಬಳಿಗೆ ಕರತರುವಂತೆ ಅಪ್ಪಣೆಕೊಟ್ಟನು; ಅವನು ಆತನ ಬಳಿಗೆ ಬಂದಾಗ ಆತನು ಅವನಿಗೆ--
18:41b.LUK.018.041 ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ ಎಂದು ಕೇಳಿದನು. ಅದಕ್ಕವನು--ಕರ್ತನೇ, ನಾನು ದೃಷ್ಟಿಹೊಂದುವಂತೆ ಮಾಡು ಅಂದನು.
18:42b.LUK.018.042 ಆಗ ಯೇಸು ಅವನಿಗೆ-- ನೀನು ದೃಷ್ಟಿ ಹೊಂದಿದವನಾಗು; ನಿನ್ನ ನಂಬಿಕೆಯೇ ನಿನ್ನನ್ನು ರಕ್ಷಿಸಿಯದೆ ಅಂದನು.ಕೂಡಲೆ ಅವನು ತನ್ನ ದೃಷ್ಟಿಹೊಂದಿದನು. ಆಗ ಅವನು ದೇವರನ್ನು ಮಹಿಮೆಪಡಿಸುತ್ತಾ ಆತನನ್ನು ಹಿಂಬಾಲಿಸಿದನು; ಎಲ್ಲಾ ಜನರು ಅದನ್ನು ನೋಡಿ ದೇವರಿಗೆ ಕೊಂಡಾಟ ಸಲ್ಲಿಸಿದರು.
18:43b.LUK.018.043 ಕೂಡಲೆ ಅವನು ತನ್ನ ದೃಷ್ಟಿಹೊಂದಿದನು. ಆಗ ಅವನು ದೇವರನ್ನು ಮಹಿಮೆಪಡಿಸುತ್ತಾ ಆತನನ್ನು ಹಿಂಬಾಲಿಸಿದನು; ಎಲ್ಲಾ ಜನರು ಅದನ್ನು ನೋಡಿ ದೇವರಿಗೆ ಕೊಂಡಾಟ ಸಲ್ಲಿಸಿದರು.
19
19:1b.LUK.019.001 ಯೇಸು ಯೆರಿಕೋವನ್ನು ಪ್ರವೇಶಿಸಿ ಹಾದು ಹೋದನು.
19:2b.LUK.019.002 ಆಗ ಇಗೋ, ಅಲ್ಲಿ ಜಕ್ಕಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯ ನಿದ್ದನು. ಇವನು ಸುಂಕದವರಲ್ಲಿ ಮುಖ್ಯಸ್ಥನೂ ಐಶ್ವರ್ಯವಂತನೂ ಆಗಿದ್ದನು.
19:3b.LUK.019.003 ಯೇಸು ಯಾರೆಂದು ಅವನು ನೋಡುವದಕ್ಕೆ ಅಪೇಕ್ಷಿಸಿದರೂ ತಾನು ಗಿಡ್ಡನಾಗಿದ್ದದರಿಂದ ಜನದಟ್ಟನೆಯ ನಿಮಿತ್ತವಾಗಿ ಆತನನ್ನು ನೋಡಲಾರದೆ ಇದ್ದನು.
19:4b.LUK.019.004 ಆಗ ಆತನನ್ನು ನೋಡುವ ಹಾಗೆ ಅವನು ಮುಂದಾಗಿ ಓಡಿಹೋಗಿ ಒಂದು ಆಲದ ಮರವನ್ನು ಹತ್ತಿದನು; ಯಾಕಂದರೆ ಆತನು ಆ ಮಾರ್ಗವಾಗಿಯೇ ಹೋಗುವವನಾಗಿ ದ್ದನು.
19:5b.LUK.019.005 ಯೇಸು ಆ ಸ್ಥಳಕ್ಕೆ ಬಂದು ಮೇಲಕ್ಕೆ ನೋಡಿ ಅವನನ್ನು ಕಂಡು ಅವನಿಗೆ--ಜಕ್ಕಾಯನೇ, ತ್ವರೆಯಾಗಿ ಇಳಿದು ಬಾ; ಯಾಕಂದರೆ ಈ ದಿನ ನಾನು ನಿನ್ನ ಮನೆಯಲ್ಲಿ ಇರತಕ್ಕದ್ದಾಗಿದೆ ಅಂದನು.
19:6b.LUK.019.006 ಆಗ ಅವನು ತ್ವರೆಯಾಗಿ ಇಳಿದು ಬಂದು ಅತನನ್ನು ಸಂತೋಷದಿಂದ ಸೇರಿಸಿಕೊಂಡನು.
19:7b.LUK.019.007 ಇದನ್ನು ಅವರು ನೋಡಿ ದಾಗ--ಇವನು ಪಾಪಿಯಾದವನೊಂದಿಗೆ ಅತಿಥಿ ಯಾಗಿರಲು ಹೋಗಿದ್ದಾನೆ ಎಂದು ಹೇಳಿ ಅವರೆಲ್ಲರೂ ಗುಣುಗುಟ್ಟಿದರು.
19:8b.LUK.019.008 ಆಗ ಜಕ್ಕಾಯನು ನಿಂತುಕೊಂಡು ಕರ್ತನಿಗೆ--ಕರ್ತನೇ, ಇಗೋ, ನನ್ನ ಸೊತ್ತಿನಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ; ನಾನು ಯಾರಿಂದಲಾದರೂ ಸುಳ್ಳಾಗಿ ದೂರು ಹೇಳಿ ಏನಾದರೂ ತಕ್ಕೊಂಡಿದ್ದರೆ ಅವನಿಗೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ ಅಂದನು.
19:9b.LUK.019.009 ಆಗ ಯೇಸು ಅವನಿಗೆ--ಈ ದಿನ ಈ ಮನೆಗೆ ರಕ್ಷಣೆ ಆಯಿತು. ಯಾಕಂದರೆ ಇವನು ಸಹ ಅಬ್ರಹಾಮನ ಮಗ ನಲ್ಲವೇ.
19:10b.LUK.019.010 ಯಾಕಂದರೆ ಮನುಷ್ಯಕುಮಾರನು ತಪ್ಪಿ ಹೋದದ್ದನ್ನು ಹುಡುಕಿ ರಕ್ಷಿಸುವದಕ್ಕೆ ಬಂದನು ಎಂದು ಹೇಳಿದನು.
19:11b.LUK.019.011 ಅವರು ಈ ಮಾತುಗಳನ್ನು ಕೇಳುತ್ತಿರಲಾಗಿ ಯೇಸು ತಾನು ಯೆರೂಸಲೇಮಿಗೆ ಸವಿಾಪವಾಗಿದ್ದದ ರಿಂದಲೂ ದೇವರ ರಾಜ್ಯವು ಕೂಡಲೆ ಪ್ರತ್ಯಕ್ಷವಾಗು ವದೆಂದು ಅವರು ಭಾವಿಸಿದ್ದದರಿಂದಲೂ ಆತನು ಇನ್ನೂ ಒಂದು ಸಾಮ್ಯವನ್ನು ಹೇಳಿದನು.
19:12b.LUK.019.012 ಅದೇ ನಂದರೆ--ಕೀರ್ತಿವಂತನಾದ ಒಬ್ಬಾನೊಬ್ಬ ಮನುಷ್ಯನು ತನಗೋಸ್ಕರ ರಾಜ್ಯವನ್ನು ಪಡೆದುಕೊಂಡು ತಿರಿಗಿ ಬರುವದಕ್ಕಾಗಿ ದೂರ ದೇಶಕ್ಕೆ ಹೊರಟುಹೋದನು.
19:13b.LUK.019.013 ಅವನು ತನ್ನ ಹತ್ತು ಆಳುಗಳನ್ನು ಕರೆದು ಅವರಿಗೆ ಹತ್ತು ಮೊಹರಿಗಳನ್ನು ಒಪ್ಪಿಸಿ--ನಾನು ಬರುವವರೆಗೆ ವ್ಯಾಪಾರ ಮಾಡಿಕೊಂಡಿರ್ರಿ ಎಂದು ಹೇಳಿದನು.
19:14b.LUK.019.014 ಆದರೆ ಅವರ ಪಟ್ಟಣದವರು ಅವನನ್ನು ದ್ವೇಷಿಸಿ--ಇವನು ನಮ್ಮ ಮೇಲೆ ಆಡಳಿತ ಮಾಡುವದು ನಮಗೆ ಮನಸ್ಸಿಲ್ಲ ಎಂದು ಹೇಳಿ ಅವನ ಹಿಂದೆ ಸಂದೇಶವನ್ನು ಕಳುಹಿಸಿದರು.
19:15b.LUK.019.015 ಇದಾದ ಮೇಲೆ ಅವನು ರಾಜ್ಯವನ್ನು ಪಡೆದು ಹಿಂದಿರುಗಿದಾಗ ವ್ಯಾಪಾ ರದಿಂದ ಪ್ರತಿಯೊಬ್ಬ ಮನುಷ್ಯನು ಎಷ್ಟು ಲಾಭವನ್ನು ಪಡೆದನೆಂದು ತಿಳುಕೊಳ್ಳುವಂತೆ ತಾನು ಹಣಕೊಟ್ಟ ಆ ಆಳುಗಳನ್ನು ತನ್ನ ಬಳಿಗೆ ಕರೆಯಬೇಕೆಂದು ಆಜ್ಞಾಪಿ ಸಿದನು.
19:16b.LUK.019.016 ಆಗ ಮೊದಲನೆಯವನು ಬಂದು--ಒಡೆಯನೇ, ನಿನ್ನ ಮೊಹರಿನಿಂದ ಹತ್ತು ಮೊಹರಿಗಳನ್ನು ಸಂಪಾದಿಸಿದ್ದೇನೆ ಅಂದನು.
19:17b.LUK.019.017 ಅದಕ್ಕೆ ಅವನು ಅವ ನಿಗೆ--ಒಳ್ಳೇದು. ನೀನು ಉತ್ತಮ ಆಳು; ಯಾಕಂದರೆ ನೀನು ಅತಿ ಸ್ವಲ್ಪದರಲ್ಲಿ ನಂಬಿಗಸ್ತನಾಗಿದ್ದೀ ಹತ್ತು ಪಟ್ಟಣಗಳ ಮೇಲೆ ನೀನು ಅಧಿಕಾರಿಯಾಗಿರು ಅಂದನು.
19:18b.LUK.019.018 ಎರಡನೆಯವನು ಬಂದು--ಒಡೆಯನೇ, ನಿನ್ನ ಮೊಹರಿಯಿಂದ ಐದು ಮೊಹರಿಗಳನ್ನು ಸಂಪಾ ದಿಸಿದ್ದೇನೆ ಅಂದನು.
19:19b.LUK.019.019 ಅದಕ್ಕೆ ಅವನು ಅದೇ ಪ್ರಕಾರ--ನೀನು ಸಹ ಐದು ಪಟ್ಟಣಗಳ ಮೇಲಿರು ಎಂದು ಅವನಿಗೆ ಹೇಳಿದನು.
19:20b.LUK.019.020 ಆಗ ಮತ್ತೊಬ್ಬನು ಬಂದು--ಒಡೆಯನೇ, ಇಗೋ, ನಾನು ಕರವಸ್ತ್ರದಲ್ಲಿ ಕಟ್ಟಿ ಇಟ್ಟಿದ್ದ ನಿನ್ನ ಮೊಹರಿ ಇದೇ.
19:21b.LUK.019.021 ಯಾಕಂದರೆ ನೀನು ಕಠಿಣವಾದ ಮನುಷ್ಯನು ಎಂದು ನಾನು ನಿನಗೆ ಭಯಪಟ್ಟೆನು; ನೀನು ಇಡದೆ ಇರುವದನ್ನು ತಕ್ಕೊಳ್ಳು ವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆಗಿದ್ದೀ ಅಂದನು.
19:22b.LUK.019.022 ಆಗ ಅವನು--ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ನ್ಯಾಯತೀರಿ ಸುವೆನು. ನಾನು ಇಡದೆ ಇರುವಲ್ಲಿ ತಕ್ಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆದ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತಲ್ಲಾ.
19:23b.LUK.019.023 ಹಾಗಿದ್ದರೆ ನನ್ನ ಹಣವನ್ನು ಧನ ವ್ಯವಹಾರದ ಸಂಸ್ಥೆಯಲ್ಲಿ ಯಾಕೆ ಹಾಕಲಿಲ್ಲ? ನಾನು ಬಂದಾಗ ಅದನ್ನು ಬಡ್ಡಿಯ ಸಹಿತ ತೆಗೆದುಕೊಳ್ಳುತ್ತಿದ್ದೆನು ಎಂದು ಅವನಿಗೆ ಹೇಳಿದನು.
19:24b.LUK.019.024 ಅವನು ಹತ್ತಿರ ನಿಂತಿದ್ದವರಿಗೆ--ಇವನ ಕಡೆಯಿಂದ ಆ ಮೊಹರಿಯನ್ನು ತಕ್ಕೊಂಡು ಹತ್ತು ಮೊಹರಿಗಳಿ ದ್ದವನಿಗೆ ಕೊಡಿರಿ ಅಂದನು.
19:25b.LUK.019.025 (ಆಗ ಅವರು ಅವ ನಿಗೆ--ಒಡೆಯನೇ, ಅವನಿಗೆ ಹತ್ತು ಮೊಹರಿಗಳಿವೆ ಯಲ್ಲಾ ಅಂದರು.)
19:26b.LUK.019.026 ಆದರೆ ನಾನು ನಿಮಗೆ ಹೇಳು ವದೇನಂದರೆ--ಇದ್ದ ಪ್ರತಿಯೊಬ್ಬನಿಗೆ ಕೊಡಲ್ಪಡು ವದು ಮತ್ತು ಇಲ್ಲದವನ ಕಡೆಯಿಂದ ಅವನಿಗೆ ಇದ್ದದ್ದೂ ಅವನಿಂದ ತೆಗೆಯಲ್ಪಡುವದು.
19:27b.LUK.019.027 ಆದರೆ ತಮ್ಮ ಮೇಲೆ ನಾನು ಆಡಳಿತ ಮಾಡುವದಕ್ಕೆ ಮನಸ್ಸಿಲ್ಲದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ ಅಂದನು.
19:28b.LUK.019.028 ಆತನು ಹೀಗೆ ಹೇಳಿದ ತರುವಾಯ ಮುಂದಾಗಿ ಯೆರೂಸಲೇಮಿಗೆ ಏರಿಹೋದನು.
19:29b.LUK.019.029 ಇದಾದ ಮೇಲೆ ಆತನು ಎಣ್ಣೇಮರಗಳ ಗುಡ್ಡವೆಂದು ಕರೆಯಲ್ಪಟ್ಟ ಗುಡ್ಡದ ಕಡೆಗೆ ಇರುವ ಬೇತ್ಫಗೆಗೂ ಬೇಥಾನ್ಯಕ್ಕೂ ಸವಿಾಪಿಸಿದಾಗ ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ--
19:30b.LUK.019.030 ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ನೀವು ಅದ ರೊಳಗೆ ಪ್ರವೇಶಿಸುತ್ತಿರುವಾಗ ಅಲ್ಲಿ ಕಟ್ಟಿರುವ ಮತ್ತು ಯಾವ ಮನುಷ್ಯನೂ ಅದರ ಮೇಲೆ ಹತ್ತದಿರುವ ಒಂದು ಕತ್ತೇ ಮರಿಯನ್ನು ಕಾಣುವಿರಿ; ಅದನ್ನು ಬಿಚ್ಚಿ ಇಲ್ಲಿಗೆ ತಕ್ಕೊಂಡು ಬನ್ನಿರಿ;
19:31b.LUK.019.031 ಯಾವನಾದರೂ ನಿಮಗೆ--ಯಾಕೆ ಅದನ್ನು ಬಿಚ್ಚುತ್ತೀರಿ ಎಂದು ಕೇಳಿದರೆ ನೀವು ಅವನಿಗೆ--ಇದು ಕರ್ತನಿಗೆ ಬೇಕಾಗಿದೆ ಎಂದು ಹೇಳಿರಿ ಅಂದನು.
19:32b.LUK.019.032 ಕಳುಹಿಸಲ್ಪಟ್ಟವರು ತಮ್ಮ ಮಾರ್ಗವಾಗಿ ಹೊರಟು ಹೋಗಿ ಆತನು ತಮಗೆ ಹೇಳಿದಂತೆಯೇ ಕಂಡರು.
19:33b.LUK.019.033 ಅವರು ಆ ಕತ್ತೇ ಮರಿ ಯನ್ನು ಬಿಚ್ಚುತ್ತಿರುವಾಗ ಆದರ ಯಜಮಾನರು ಅವರಿಗೆ--ನೀವು ಕತ್ತೇಮರಿಯನ್ನು ಯಾಕೆ ಬಿಚ್ಚುತ್ತೀರಿ ಎಂದು ಕೇಳಿದ್ದಕ್ಕೆ
19:34b.LUK.019.034 ಅವರು--ಅದು ಕರ್ತನಿಗೆ ಬೇಕಾಗಿದೆ ಅಂದರು.
19:35b.LUK.019.035 ಅವರು ಅದನ್ನು ಯೇಸು ವಿನ ಬಳಿಗೆ ತಂದು ತಮ್ಮ ಬಟ್ಟೆಗಳನ್ನು ಕತ್ತೇಮರಿಯ ಮೇಲೆ ಹಾಕಿ ಅದರ ಮೇಲೆ ಯೇಸುವನ್ನು ಕೂಡ್ರಿಸಿ ದರು.
19:36b.LUK.019.036 ಆತನು ಹೋಗುತ್ತಿರುವಾಗ ಅವರು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು.
19:37b.LUK.019.037 ಇದಲ್ಲದೆ ಆತನು ಎಣ್ಣೇಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಸವಿಾಪಿಸಿದಾಗ ಶಿಷ್ಯ ಸಮೂಹವೆಲ್ಲಾ ತಾವು ನೋಡಿದ್ದ ಎಲ್ಲಾ ಮಹತ್ಕಾರ್ಯಗಳಿಗಾಗಿ ಸಂತೋಷ ಪಡುತ್ತಾ ಮಹಾಧ್ವನಿಯಿಂದ ದೇವರನ್ನು ಕೊಂಡಾಡ ಲಾರಂಭಿಸಿ--
19:38b.LUK.019.038 ಕರ್ತನ ಹೆಸರಿನಲ್ಲಿ ಬರುವ ಅರ ಸನು ಸ್ತುತಿಹೊಂದಲಿ; ಪರಲೋಕದಲ್ಲಿ ಸಮಾಧಾನ, ಮತ್ತು ಅತ್ಯುನ್ನತದಲ್ಲಿ ಮಹಿಮೆ ಎಂದು ಹೇಳಿದರು.
19:39b.LUK.019.039 ಜನಸಮೂಹದೊಳಗಿಂದ ಕೆಲವು ಫರಿಸಾಯರು ಆತನಿಗೆ--ಬೋಧಕನೇ, ನಿನ್ನ ಶಿಷ್ಯರನ್ನು ಗದರಿಸು ಅಂದರು.
19:40b.LUK.019.040 ಆಗ ಆತನು ಪ್ರತ್ಯುತ್ತರವಾಗಿ ಅವ ರಿಗೆ--ಇವರು ಸುಮ್ಮನಿರುವದಾದರೆ ಈ ಕಲ್ಲುಗಳು ಕೂಡಲೆ ಕೂಗುವವು ಎಂದು ನಾನು ನಿಮಗೆ ಹೇಳು ತ್ತೇನೆ ಅಂದನು.
19:41b.LUK.019.041 ತರುವಾಯ ಆತನು ಸವಿಾಪಿಸಿದಾಗ ಪಟ್ಟಣ ವನ್ನು ನೋಡಿ ಅದರ ವಿಷಯವಾಗಿ ಅತ್ತು--
19:42b.LUK.019.042 ನೀನು ಈ ನಿನ್ನ ದಿನದಲ್ಲಿಯಾದರೂ ನಿನ್ನ ಸಮಾ ಧಾನಕ್ಕೆ ಸಂಬಂಧಪಟ್ಟವುಗಳನ್ನು ತಿಳಿದುಕೊಳ್ಳಬೇಕಾ ಗಿತ್ತು; ಆದರೆ ಈಗ ಅವುಗಳು ನಿನ್ನ ಕಣ್ಣುಗಳಿಗೆ ಮರೆಯಾಗಿವೆ.
19:43b.LUK.019.043 ಯಾಕಂದರೆ ನಿನ್ನ ಶತೃಗಳು ನಿನ್ನ ಸುತ್ತಲೂ ಕಂದಕವನ್ನು ತೋಡಿ ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಒಳಗೆ ಇರಿಸುವ ದಿನಗಳು ನಿನ್ನ ಮೇಲೆ ಬರುವವು.
19:44b.LUK.019.044 ಇದಲ್ಲದೆ ಅವರು ನಿನ್ನನ್ನೂ ನಿನ್ನೊಳ ಗಿರುವ ನಿನ್ನ ಮಕ್ಕಳನ್ನೂ ನೆಲಸಮ ಮಾಡುವರು; ಮತ್ತು ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಇರದಂತೆ ಮಾಡುವರು; ಯಾಕಂದರೆ ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳುಕೊಳ್ಳಲಿಲ್ಲ ಅಂದನು.
19:45b.LUK.019.045 ಆತನು ದೇವಾಲಯದೊಳಕ್ಕೆ ಹೋಗಿ ಅದರಲ್ಲಿ ಮಾರುವವರನ್ನೂ ಕೊಂಡುಕೊಳ್ಳುವವರನ್ನೂ ಹೊರಗೆ ಹಾಕುವದಕ್ಕೆ ಪ್ರಾರಂಭಿಸಿ
19:46b.LUK.019.046 ಅವರಿಗೆ--ನನ್ನ ಮನೆಯು ಪ್ರಾರ್ಥನೆಯ ಮನೆ ಎಂದು ಬರೆಯಲ್ಪಟ್ಟಿದೆ; ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಅಂದನು.
19:47b.LUK.019.047 ಇದಲ್ಲದೆ ಆತನು ಪ್ರತಿದಿನವೂ ದೇವಾಲಯ ದಲ್ಲಿ ಬೋಧಿಸುತ್ತಿದ್ದನು. ಆದರೆ ಪ್ರಧಾನಯಾಜಕರೂ ಶಾಸ್ತ್ರಿಗಳೂ ಜನರ ಪ್ರಮುಖರೂ ಆತನನ್ನು ಕೊಲ್ಲು ವದಕ್ಕೆ ಹವಣಿಸುತ್ತಿದ್ದರು.ಆದರೆ ಅವರು ಏನು ಮಾಡಬೇಕೆಂಬದನ್ನು ಕಂಡುಕೊಳ್ಳದೆ ಹೋದರು; ಯಾಕಂದರೆ ಜನರೆಲ್ಲರೂ ಆತನು ಹೇಳುವದನು ಬಹಳ ಲಕ್ಷ್ಯಕೊಟ್ಟು ಆತನ ಉಪದೇಶ ವನ್ನು ಕೇಳುತ್ತಿದ್ದರು.
19:48b.LUK.019.048 ಆದರೆ ಅವರು ಏನು ಮಾಡಬೇಕೆಂಬದನ್ನು ಕಂಡುಕೊಳ್ಳದೆ ಹೋದರು; ಯಾಕಂದರೆ ಜನರೆಲ್ಲರೂ ಆತನು ಹೇಳುವದನು ಬಹಳ ಲಕ್ಷ್ಯಕೊಟ್ಟು ಆತನ ಉಪದೇಶ ವನ್ನು ಕೇಳುತ್ತಿದ್ದರು.
20
20:1b.LUK.020.001 ಇದಾದ ಮೇಲೆ ಆ ದಿವಸಗಳಲ್ಲಿ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಬೋಧಿಸುತ್ತಾ ಸುವಾರ್ತೆಯನ್ನು ಸಾರುತ್ತಿದ್ದಾಗ ಪ್ರಧಾನ ಯಾಜಕರು ಶಾಸ್ತ್ರಿಗಳು ಹಿರಿಯರ ಕೂಡ ಆತನ ಬಳಿಗೆ ಬಂದು
20:2b.LUK.020.002 ಆತನೊಂದಿಗೆ ಮಾತನಾ ಡುತ್ತಾ--ನೀನು ಇವುಗಳನ್ನು ಯಾವ ಅಧಿಕಾರದಿಂದ ಮಾಡುತ್ತೀ? ಇಲ್ಲವೆ ನಿನಗೆ ಈ ಅಧಿಕಾರವನ್ನು ಕೊಟ್ಟವನು ಯಾರು? ನಮಗೆ ಹೇಳು ಅಂದರು.
20:3b.LUK.020.003 ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ನಿಮ್ಮನ್ನು ಒಂದು ವಿಷಯ ಕೇಳುತ್ತೇನೆ, ನನಗೆ ಉತ್ತರಕೊಡಿರಿ
20:4b.LUK.020.004 ಯೋಹಾನನ ಬಾಪ್ತಿಸ್ಮವು ಪರಲೋಕ ದಿಂದಲೋ ಇಲ್ಲವೆ ಮನುಷ್ಯರಿಂದಲೋ ಎಂದು ಕೇಳಿದನು.
20:5b.LUK.020.005 ಆಗ ಅವರು ತಮ್ಮೊಳಗೆ--ಪರಲೋಕ ದಿಂದ ಎಂದು ನಾವು ಹೇಳಿದರೆ ಆತನು--ನೀವು ಯಾಕೆ ಅವನನ್ನು ನಂಬಲಿಲ್ಲ ಎಂದು ಹೇಳುವನು.
20:6b.LUK.020.006 ಆದರೆ--ಮನುಷ್ಯ ರಿಂದ ಎಂದು ನಾವು ಹೇಳಿದರೆ ಎಲ್ಲಾ ಜನರು ನಮಗೆ ಕಲ್ಲೆಸೆಯುವರು. ಯಾಕಂದರೆ ಯೋಹಾನನು ಪ್ರವಾದಿಯೆಂದು ಅವರು ಒಪ್ಪಿದ್ದಾರೆ ಎಂದು ಅಂದುಕೊಂಡು
20:7b.LUK.020.007 ಅವರು--ಅದು ಎಲ್ಲಿಂ ದಲೋ ನಾವು ಅರಿಯೆವು ಎಂದು ಉತ್ತರಕೊಟ್ಟರು.
20:8b.LUK.020.008 ಆಗ ಯೇಸು ಅವರಿಗೆ--ಇವುಗಳನ್ನು ನಾನು ಯಾವ ಅಧಿಕಾರದಿಂದ ಮಾಡುತ್ತೇನೆಂದು ನಾನೂ ನಿಮಗೆ ಹೇಳುವದಿಲ್ಲ ಅಂದನು.
20:9b.LUK.020.009 ಇದಲ್ಲದೆ ಆತನು ಜನರಿಗೆ ಈ ಸಾಮ್ಯವನ್ನು ಹೇಳುವದಕ್ಕೆ ಪ್ರಾರಂಭಿಸಿ--ಒಬ್ಬಾನೊಬ್ಬ ಮನುಷ್ಯನು ದ್ರಾಕ್ಷೇತೋಟವನ್ನು ನೆಟ್ಟು ಅದನ್ನು ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬಹುಕಾಲದ ವರೆಗೆ ಒಂದು ದೂರ ದೇಶಕ್ಕೆ ಹೊರಟುಹೋದನು.
20:10b.LUK.020.010 ಫಲ ಕಾಲದಲ್ಲಿ ಅವನು ತನಗೆ ಬರಬೇಕಾಗಿದ್ದ ದ್ರಾಕ್ಷೇ ತೊಟದ ಫಲವನ್ನು ಕೊಡುವಂತೆ ಅವನು ತನ್ನ ಆಳನ್ನು ಅವರ ಬಳಿಗೆ ಕಳುಹಿಸಿಕೊಟ್ಟನು. ಆದರೆ ಆ ಒಕ್ಕಲಿಗರು ಅವನನ್ನು ಹೊಡೆದು ಬರಿದಾಗಿ ಕಳುಹಿಸಿಬಿಟ್ಟರು.
20:11b.LUK.020.011 ಅವನು ಇನ್ನೊಬ್ಬ ಆಳನ್ನು ತಿರಿಗಿ ಕಳುಹಿಸಿದನು. ಅವರು ಅವನನ್ನು ಸಹ ಹೊಡೆದು ಅವಮಾನಪಡಿಸಿ ಬರಿದಾಗಿ ಕಳುಹಿಸಿಬಿಟ್ಟರು.
20:12b.LUK.020.012 ಅವನು ತಿರಿಗಿ ಮೂರನೆಯವನನ್ನು ಕಳುಹಿಸಿದನು; ಆಗ ಅವರು ಅವನನ್ನು ಸಹ ಗಾಯಪಡಿಸಿ ಹೊರಗೆ ಹಾಕಿದರು.
20:13b.LUK.020.013 ಆಗ ದ್ರಾಕ್ಷೇತೋಟದ ಯಜಮಾನನು--ನಾನೇನು ಮಾಡಲಿ? ನಾನು ನನ್ನ ಪ್ರಿಯ ಮಗನನ್ನೇ ಕಳುಹಿ ಸುವೆನು. ಅವರು ಇವನನ್ನು ನೋಡಿಯಾದರೂ ಇವ ನನ್ನು ಗೌರವಿಸಿಯಾರು ಎಂದು ಅಂದುಕೊಂಡನು.
20:14b.LUK.020.014 ಆದರೆ ಒಕ್ಕಲಿಗರು ಅವನನ್ನು ನೋಡಿದಾಗ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನು; ಬನ್ನಿರಿ, ಇವ ನನ್ನು ಕೊಂದುಹಾಕೋಣ ಬಾಧ್ಯತೆಯು ನಮ್ಮದಾಗು ತ್ತದೆ ಎಂದು ಆಲೋಚನೆ ಮಾಡಿಕೊಂಡರು.
20:15b.LUK.020.015 ಅವರು ಅವನನ್ನು ದ್ರಾಕ್ಷೇ ತೋಟದ ಹೊರಗೆಹಾಕಿ ಕೊಂದರು. ಹೀಗಿರಲು ದ್ರಾಕ್ಷೇತೋಟದ ಯಜ ಮಾನನು ಅವರಿಗೆ ಏನು ಮಾಡುವನು?
20:16b.LUK.020.016 ಅವನು ಬಂದು ಈ ಒಕ್ಕಲಿಗರನ್ನು ಸಂಹರಿಸಿ ದ್ರಾಕ್ಷೇತೋಟ ವನ್ನು ಬೇರೆಯವರಿಗೆ ಕೊಡುವನು ಅಂದನು. ಅವರು ಇದನ್ನು ಕೇಳಿ--ಹಾಗೆ ಎಂದಿಗೂ ಆಗಬಾರದು ಅಂದರು.
20:17b.LUK.020.017 ಆಗ ಆತನು ಅವರನ್ನು ನೋಡಿ--ಹಾಗಾದರೆ ಮನೇ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು ಎಂದು ಬರೆದಿರು ವದು ಏನು?
20:18b.LUK.020.018 ಯಾವನಾದರೂ ಆ ಕಲ್ಲಿನ ಮೇಲೆ ಬಿದ್ದರೆ ತುಂಡುತುಂಡಾಗುವನು. ಆದರೆ ಇದು ಯಾರ ಮೇಲೆ ಬೀಳುವದೋ ಅವನನ್ನು ಅದು ಅರೆದು ಪುಡಿಪುಡಿ ಮಾಡುವದು ಅಂದನು.
20:19b.LUK.020.019 ಅದೇ ಗಳಿಗೆಯಲ್ಲಿ ಪ್ರಧಾನಯಾಜಕರೂ ಶಾಸ್ತ್ರಿಗಳೂ ಆತನ ಮೇಲೆ ಕೈ ಹಾಕುವದಕ್ಕೆ ಹವಣಿ ಸಿದರು; ಯಾಕಂದರೆ ಅತನು ತಮಗೆ ವಿರೋಧ ವಾಗಿಯೇ ಈ ಸಾಮ್ಯವನ್ನು ಹೇಳಿದ್ದನೆಂದು ಅವರು ತಿಳಿದುಕೊಂಡಿದ್ದರು; ಆದರೆ ಅವರು ಜನರಿಗೆ ಭಯಪಟ್ಟರು.
20:20b.LUK.020.020 ಅವರು ಆತನನ್ನು ಹೊಂಚಿ ನೋಡಿದವರಾಗಿ ಮಾತಿನಲ್ಲಿ ಆತನನ್ನು ಸಿಕ್ಕಿಸುವಂತೆಯೂ ಅಧಿಪತಿಯ ಬಲಕ್ಕೆ ಮತ್ತು ಅಧಿಕಾರಕ್ಕೆ ಒಪ್ಪಿಸುವಂತೆಯೂ ತಾವು ನೀತಿವಂತರೆಂದು ನಟಿಸುವ ಗೂಢಾಚಾರರನ್ನು ಕಳುಹಿಸಿದರು.
20:21b.LUK.020.021 ಆಗ ಅವರು ಆತನಿಗೆ--ಗುರುವೇ, ನೀನು ಮುಖದಾಕ್ಷಿಣ್ಯವಿಲ್ಲದೆ ಸರಿಯಾಗಿ ಮಾತನಾಡಿ ಬೋಧಿ ಸುತ್ತೀ; ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸು ವವನಾಗಿದ್ದೀಯೆಂದು ನಾವು ಬಲ್ಲೆವು.
20:22b.LUK.020.022 ಆದರೆ ಕೈಸರನಿಗೆ ಕಪ್ಪವನ್ನು ಸಲ್ಲಿಸುವದು ನ್ಯಾಯವೋ ಅಥವಾ ಅಲ್ಲವೋ ಎಂದು ಕೇಳಿದರು.
20:23b.LUK.020.023 ಆದರೆ ಆತನು ಅವರ ಕುಯುಕ್ತಿಯನ್ನು ತಿಳಿದು ಅವರಿಗೆ--ನನ್ನನ್ನು ಯಾಕೆ ಶೋಧಿಸುತ್ತೀರಿ?
20:24b.LUK.020.024 ನನಗೆ ಒಂದು ನಾಣ್ಯವನ್ನು ತೋರಿಸಿರಿ. ಇದಕ್ಕೆ ಯಾವನ ರೂಪವೂ ಮೇಲ್ಬರಹವೂ ಇದೆ ಎಂದು ಅವರನ್ನು ಕೇಳಲು ಅವರು ಪ್ರತ್ಯುತ್ತರವಾಗಿ--ಕೈಸರನದು ಅಂದರು.
20:25b.LUK.020.025 ಆತನು ಅವರಿಗೆ--ಹಾಗಾದರೆ ಕೈಸರನಿಗೆ ಸಂಬಂಧಪಟ್ಟವುಗಳನ್ನು ಕೈಸರನಿಗೂ ದೇವರಿಗೆ ಸಂಬಂಧಪಟ್ಟವುಗಳನ್ನು ದೇವರಿಗೂ ಸಲ್ಲಿಸಿರಿ ಅಂದನು.
20:26b.LUK.020.026 ಆಗ ಅವರು ಜನರ ಮುಂದೆ ಆತನನ್ನು ಮಾತುಗಳಲ್ಲಿ ಸಿಕ್ಕಿಸಲಾರದೆ ಆತನ ಉತ್ತರಗಳಿಗಾಗಿ ಆಶ್ಚರ್ಯಪಟ್ಟು ಸುಮ್ಮನಿದ್ದರು.
20:27b.LUK.020.027 ಇದಲ್ಲದೆ ಪುನರುತ್ಥಾನವನ್ನು ಅಲ್ಲಗಳೆಯುವ ಸದ್ದುಕಾಯರಲ್ಲಿ ಕೆಲವರು ಆತನ ಬಳಿಗೆ ಬಂದು ಆತನಿಗೆ--
20:28b.LUK.020.028 ಬೋಧಕನೇ, ಹೆಂಡತಿ ಇದ್ದ ಒಬ್ಬ ಮನುಷ್ಯನು ಮಕ್ಕಳಿಲ್ಲದೆ ಸತ್ತರೆ ಅವನ ಸಹೋದರನು ಅವನ ಹೆಂಡತಿಯನ್ನು ಮದುವೆಯಾಗಿ ತನ್ನ ಸಹೋ ದರನಿಗಾಗಿ ಸಂತಾನವನ್ನು ಪಡೆಯಬೇಕೆಂದು ಮೋಶೆಯು ನಮಗೆ ಬರೆದುಕೊಟ್ಟನು.
20:29b.LUK.020.029 ಹೀಗೆ ಏಳು ಮಂದಿ ಸಹೋದರರು ಇರಲಾಗಿ ಮೊದಲನೆಯವನು ಮದುವೆಯಾಗಿ ಮಕ್ಕಳಿಲ್ಲದೆ ಸತ್ತನು.
20:30b.LUK.020.030 ಎರಡನೆಯ ವನು ಆಕೆಯನ್ನು ಮದುವೆಯಾಗಿ ಮಕ್ಕಳಿಲ್ಲದೆ ಸತ್ತನು.
20:31b.LUK.020.031 ಮೂರನೆಯವನು ಆಕೆಯನ್ನು ಮದುವೆಯಾದನು; ಅದೇ ರೀತಿಯಲ್ಲಿ ಏಳು ಜನರು ಸಹ ಮದುವೆಯಾಗಿ ಮಕ್ಕಳಿಲ್ಲದೆ ಸತ್ತರು.
20:32b.LUK.020.032 ಕಡೇ ದಾಗಿ ಆ ಹೆಂಗಸು ಸಹ ಸತ್ತಳು.
20:33b.LUK.020.033 ಹಾಗಾದರೆ ಪುನರುತ್ಥಾನದಲ್ಲಿ ಆಕೆಯು ಅವರೊಳಗೆ ಯಾರ ಹೆಂಡತಿಯಾಗಿರುವಳು? ಯಾಕಂದರೆ ಏಳು ಮಂದಿಯೂ ಅವಳನ್ನು ಹೆಂಡತಿ ಯನ್ನಾಗಿ ಮಾಡಿಕೊಂಡಿದ್ದರು ಅಂದರು.
20:34b.LUK.020.034 ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ಲೋಕದ ಮಕ್ಕಳು ಮದುವೆಮಾಡಿಕೊಳ್ಳುತ್ತಾರೆ ಮತ್ತು ಮದುವೆ ಮಾಡಿಕೊಡುತ್ತಾರೆ.
20:35b.LUK.020.035 ಆದರೆ ಆ ಲೋಕವನ್ನೂ ಸತ್ತವರೊಳಗಿಂದ ಪುನರುತ್ಥಾನವನ್ನೂ ಹೊಂದುವದಕ್ಕೆ ಯೋಗ್ಯರೆಂದು ಎಣಿಸಲ್ಪಡುವವರು ಮದುವೆ ಮಾಡಿ ಕೊಳ್ಳುವದೂ ಇಲ್ಲ ಇಲ್ಲವೆ ಮದುವೆ ಮಾಡಿಕೊಡು ವದೂ ಇಲ್ಲ.
20:36b.LUK.020.036 ಇದಲ್ಲದೆ ಅವರು ಇನ್ನೆಂದಿಗೂ ಸಾಯುವದಿಲ್ಲ; ಯಾಕಂದರೆ ಅವರು ದೂತರಿಗೆ ಸರಿಸಮಾನರೂ ಪುನರುತ್ಥಾನದ ಮಕ್ಕಳೂ ಆಗಿರುವದ ರಿಂದ ಅವರು ದೇವರ ಮಕ್ಕಳಾಗಿದ್ದಾರೆ.
20:37b.LUK.020.037 ಮೋಶೆಯು ಸಹ ಪೊದೆಯ ಹತ್ತಿರ ಕರ್ತನು ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಎಂದು ಕರೆದಾಗ ಸತ್ತವರು ಎಬ್ಬಿಸಲ್ಪಡು ತ್ತಾರೆಂಬದನ್ನು ವ್ಯಕ್ತಪಡಿಸಿದನು.
20:38b.LUK.020.038 ಯಾಕಂದರೆ ಆತನು ಜೀವಿಸುವವರಿಗೇ ದೇವರಾಗಿದ್ದಾನೆ, ಸತ್ತವರಿ ಗಲ್ಲ; ಯಾಕಂದರೆ ಎಲ್ಲರೂ ಆತನಿಗಾಗಿ ಜೀವಿಸುತ್ತಾರೆ ಅಂದನು.
20:39b.LUK.020.039 ಆಗ ಶಾಸ್ತ್ರಿಗಳಲ್ಲಿ ಕೆಲವರು ಪ್ರತ್ಯುತ್ತರ ವಾಗಿ--ಬೋಧಕನೇ, ನೀನು ಸರಿಯಾಗಿ ಹೇಳಿದ್ದೀ ಅಂದರು.
20:40b.LUK.020.040 ಅವರು ಆತನಿಗೆ ಯಾವ ಪ್ರಶ್ನೆಯನ್ನೂ ಕೇಳುವದಕ್ಕೆ ಧೈರ್ಯಗೊಳ್ಳಲಿಲ್ಲ.
20:41b.LUK.020.041 ಆತನು ಅವ ರಿಗೆ--ಕ್ರಿಸ್ತನು ದಾವೀದನ ಮಗನೆಂದು ಅವರು ಹೇಳುವದು ಹೇಗೆ?
20:42b.LUK.020.042 ದಾವೀದನು ತಾನೇ ಕೀರ್ತನೆ ಗಳ ಪುಸ್ತಕದಲ್ಲಿ--ಕರ್ತನು ನನ್ನ ಕರ್ತನಿಗೆ--
20:43b.LUK.020.043 ನಾನು ನಿನ್ನ ವೈರಿಗಳನ್ನು ನಿನ್ನ ಪಾದಗಳ ಪೀಠವಾಗಿ ಮಾಡುವ ವರೆಗೂ ನನ್ನ ಬಲಪಾರ್ಶ್ವದಲ್ಲಿ ನೀನು ಕೂತುಕೊಂಡಿರು ಎಂದು ಹೇಳಿದನು.
20:44b.LUK.020.044 ಆದಕಾರಣ ದಾವೀದನು ಆತನನ್ನು ಕರ್ತನು ಎಂದು ಕರೆಯುವಾಗ ಆತನು ಅವನಿಗೆ ಮಗನಾಗುವದು ಹೇಗೆ ಎಂದು ಕೇಳಿದನು.
20:45b.LUK.020.045 ಅಮೇಲೆ ಜನರೆಲ್ಲರೂ ಕೇಳುತ್ತಿದ್ದಾಗ ಆತನು ತನ್ನ ಶಿಷ್ಯರಿಗೆ--
20:46b.LUK.020.046 ನಿಲುವಂಗಿಗಳನ್ನು ತೊಟ್ಟುಕೊಂಡು ತಿರುಗಾಡುವದಕ್ಕೆ ಬಯಸುವವರೂ ಸಂತೆಗಳಲ್ಲಿ ವಂದನೆಗಳನ್ನೂ ಸಭಾಮಂದಿರಗಳಲ್ಲಿ ಅತ್ಯುನ್ನತ ಸ್ಥಾನ ಗಳನ್ನೂ ಔತಣಗಳಲ್ಲಿ ಮುಖ್ಯಸ್ಥಾನಗಳನ್ನೂ ಪ್ರೀತಿಸುವ ವರಾದ ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರ್ರಿ;ಇವರು ವಿಧವೆಯರ ಮನೆಗಳನ್ನು ನುಂಗಿ ತೋರಿಕೆ ಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ; ಇವರೇ ಹೆಚ್ಚಾದ ದಂಡನೆಯನ್ನು ಹೊಂದುವರು ಅಂದನು.
20:47b.LUK.020.047 ಇವರು ವಿಧವೆಯರ ಮನೆಗಳನ್ನು ನುಂಗಿ ತೋರಿಕೆ ಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ; ಇವರೇ ಹೆಚ್ಚಾದ ದಂಡನೆಯನ್ನು ಹೊಂದುವರು ಅಂದನು.
21
21:1b.LUK.021.001 ಇದಲ್ಲದೆ ಐಶ್ವರ್ಯವಂತರು ತಮ್ಮ ಕಾಣಿಕೆಗಳನ್ನು ಬೊಕ್ಕಸದಲ್ಲಿ ಹಾಕುವದನ್ನು ಆತನು ಕಣ್ಣೆತ್ತಿ ನೋಡಿದನು.
21:2b.LUK.021.002 ಒಬ್ಬ ಬಡ ವಿಧವೆಯು ಸಹ ಎರಡು ಕಾಸುಗಳನ್ನು ಅದರಲ್ಲಿ ಹಾಕುವದನ್ನು ಆತನು ನೋಡಿದನು.
21:3b.LUK.021.003 ಆತನು--ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಈ ಬಡ ವಿಧವೆಯು ಅವರೆಲ್ಲರಿಗಿಂತಲೂ ಹೆಚ್ಚು ಹಾಕಿದ್ದಾಳೆ;
21:4b.LUK.021.004 ಯಾಕಂದರೆ ಇವರೆಲ್ಲರೂ ತಮಗಿರುವ ಸಮೃದ್ಧಿಯಲ್ಲಿ ದೇವರಿಗೆ ಕಾಣಿಕೆಗಳನ್ನು ಹಾಕಿದ್ದಾರೆ; ಆದರೆ ಈಕೆಯು ತನ್ನ ಬಡತನದಲ್ಲಿ ತನ್ನ ಜೀವನಕ್ಕೆ ಇದ್ದದ್ದನ್ನೆಲ್ಲಾ ಹಾಕಿದ್ದಾಳೆ ಅಂದನು.
21:5b.LUK.021.005 ತರುವಾಯ ಕೆಲವರು ದೇವಾಲಯದ ವಿಷಯ ವಾಗಿ ಅದು ಎಂಥಾ ಒಳ್ಳೇ ಕಲ್ಲುಗಳಿಂದಲೂ ದಾನಗ ಳಿಂದಲೂ ಅಲಂಕೃತವಾಗಿದೆ ಎಂದು ಮಾತನಾಡು ತ್ತಿರುವಾಗ ಆತನು--
21:6b.LUK.021.006 ನೀವು ನೋಡುತ್ತಿರುವ ಇವುಗ ಳಾದರೋ ಕೆಡವಲ್ಪಟ್ಟು ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಬಿಡಲ್ಪಡದ ದಿವಸಗಳು ಬರುವವು ಅಂದನು.
21:7b.LUK.021.007 ಆಗ ಅವರು ಆತನಿಗೆ--ಬೋಧಕನೇ, ಇವುಗಳು ಯಾವಾಗ ಆಗುವವು? ಇವುಗಳು ಸಂಭವಿ ಸುವದಕ್ಕಿರುವಾಗ ಯಾವ ಸೂಚನೆ ಇರುವದು ಎಂದು ಕೇಳಿದರು.
21:8b.LUK.021.008 ಅದಕ್ಕೆ ಆತನು--ನೀವು ಮೋಸ ಹೋಗ ದಂತೆ ಎಚ್ಚರಿಕೆ ತಂದುಕೊಳ್ಳಿರಿ; ಯಾಕಂದರೆ ಅನೇಕರು ನನ್ನ ಹೆಸರಿನಲ್ಲಿ ಬಂದು--ನಾನೇ ಕ್ರಿಸ್ತನು ಎಂದು ಹೇಳುವರು; ಸಮಯವು ಸವಿಾಪಿಸಿದೆ, ಆದಕಾರಣ ನೀವು ಅವರ ಹಿಂದೆ ಹೋಗಬೇಡಿರಿ.
21:9b.LUK.021.009 ನೀವು ಯುದ್ಧಗಳ ಮತ್ತು ಕಲಹಗಳ ವಿಷಯವಾಗಿ ಕೇಳುವಾಗ ದಿಗಿಲುಪಡಬೇಡಿರಿ; ಯಾಕಂದರೆ ಇವುಗಳು ಮೊದಲು ಆಗುವದು ಅಗತ್ಯ; ಆದರೂ ಕೂಡಲೆ ಅಂತ್ಯ ಬರುವದಿಲ್ಲ ಅಂದನು.
21:10b.LUK.021.010 ಆತನು ಅವರಿಗೆ--ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳು ವವು.
21:11b.LUK.021.011 ಬೇರೆ ಬೇರೆ ಸ್ಥಳಗಳಲ್ಲಿ ಮಹಾಭೂಕಂಪಗಳೂ ಬರಗಳೂ ವ್ಯಾಧಿಗಳೂ ಇರುವವು; ಭಯಹುಟ್ಟಿ ಸುವ ದೃಶ್ಯಗಳೂ ಮಹಾಸೂಚನೆಗಳೂ ಆಕಾಶದಿಂದ ಆಗುವವು.
21:12b.LUK.021.012 ಆದರೆ ಇವೆಲ್ಲವುಗಳಿಗಿಂತ ಮೊದಲು ಅವರು ನಿಮ್ಮನ್ನು ಹಿಡಿದು ಹಿಂಸಿಸಿ ಸಭಾಮಂದಿರ ಗಳಿಗೂ ಸೆರೆಮನೆಗಳಿಗೂ ಒಪ್ಪಿಸಿ ನನ್ನ ಹೆಸರಿನ ನಿಮಿತ್ತ ಅರಸುಗಳ ಮತ್ತು ಅಧಿಕಾರಿಗಳ ಮುಂದೆ ನಿಮ್ಮನ್ನು ತರುವರು.
21:13b.LUK.021.013 ಇದು ಸಾಕ್ಷಿಗೋಸ್ಕರ ನಿಮಗೆ ಪರಿಣಮಿ ಸುವದು.
21:14b.LUK.021.014 ಹೀಗಿರುವದರಿಂದ ನೀವು ಏನು ಉತ್ತರ ಕೊಡಬೇಕೆಂದು ಮುಂದಾಗಿ ಯೋಚಿಸಬಾರದೆಂದು ನಿಮ್ಮ ಹೃದಯಗಳಲ್ಲಿ ನಿಶ್ಚಯಮಾಡಿಕೊಳ್ಳಿರಿ.
21:15b.LUK.021.015 ಯಾಕ ಂದರೆ ನಿಮ್ಮ ವಿರೋಧಿಗಳೆಲ್ಲರೂ ಪ್ರತಿವಾದ ಮಾಡ ದಂಥ ಇಲ್ಲವೆ ವಿರೋಧಿಸದಂಥ ಬಾಯನ್ನೂ ಜ್ಞಾನ ವನ್ನೂ ನಾನು ನಿಮಗೆ ಕೊಡುವೆನು.
21:16b.LUK.021.016 ಆದರೆ ತಂದೆ ತಾಯಿಗಳೂ ಸಹೋದರರೂ ಬಂಧುಗಳೂ ಸ್ನೇಹಿ ತರೂ ನಿಮ್ಮನ್ನು ಹಿಡಿದುಕೊಡುವರು; ನಿಮ್ಮಲ್ಲಿ ಕೆಲವ ರನ್ನು ಕೊಲ್ಲಿಸುವರು.
21:17b.LUK.021.017 ನನ್ನ ಹೆಸರಿನ ನಿಮಿತ್ತವಾಗಿ ನಿಮ್ಮನ್ನು ಎಲ್ಲರೂ ದ್ವೇಷಿಸುವರು.
21:18b.LUK.021.018 ಆದರೆ ನಿಮ್ಮ ತಲೆಯ ಒಂದು ಕೂದಲಾದರೂ ನಾಶವಾಗುವದಿಲ್ಲ.
21:19b.LUK.021.019 ನೀವು ನಿಮ್ಮ ಸಹನೆಯಿಂದ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತೀರಿ. 20ಆದರೆ ಸೈನ್ಯಗಳು ಯೆರೂಸಲೇ ಮನ್ನು ಮುತ್ತಿಗೆ ಹಾಕುವದನ್ನು ನೀವು ನೋಡುವಾಗ ಅದು ಹಾಳಾಗುವ ಕಾಲವು ಸವಿಾಪಿಸಿದೆ ಎಂದು ತಿಳಿದುಕೊಳ್ಳಿರಿ.
21:20b.LUK.021.020 ಆದರೆ ಸೈನ್ಯಗಳು ಯೆರೂಸಲೇ ಮನ್ನು ಮುತ್ತಿಗೆ ಹಾಕುವದನ್ನು ನೀವು ನೋಡುವಾಗ ಅದು ಹಾಳಾಗುವ ಕಾಲವು ಸವಿಾಪಿಸಿದೆ ಎಂದು ತಿಳಿದುಕೊಳ್ಳಿರಿ.
21:21b.LUK.021.021 ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ; ಅದರ ಮಧ್ಯದಲ್ಲಿ ರುವವರು ಹೊರಟುಹೋಗಲಿ; ಇದಲ್ಲದೆ ಹಳ್ಳಿಗಳಲ್ಲಿ ಇರುವವರು ಅವುಗಳಲ್ಲಿ ಪ್ರವೇಶಿಸದೆ ಇರಲಿ.
21:22b.LUK.021.022 ಬರೆದಿರುವವುಗಳೆಲ್ಲವೂ ನೆರವೇರುವಂತೆ ಇವು ಮುಯ್ಯಿತೀರಿಸುವ ದಿವಸಗಳಾಗಿವೆ.
21:23b.LUK.021.023 ಆದರೆ ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆ ಕುಡಿಸುವ ವರಿಗೂ ಅಯ್ಯೊ! ಯಾಕಂದರೆ ದೇಶದಲ್ಲಿ ಮಹಾ ವಿಪತ್ತೂ ಈ ಜನರ ಮೇಲೆ ಕೋಪವೂ ಆಗ ಇರು ವದು.
21:24b.LUK.021.024 ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.
21:25b.LUK.021.025 ಸೂರ್ಯ ಚಂದ್ರ ಮತ್ತು ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು; ಇದಲ್ಲದೆ ಭೂಮಿಯ ಮೇಲಿರುವ ಜನಾಂಗಗಳಿಗೆ ಕಳವಳದಿಂದ ಸಂಕಟ ಉಂಟಾಗುವದು; ಸಮುದ್ರದ ಮತ್ತು ತೆರೆಗಳ ಘೋಷಣೆಯ ನಿಮಿತ್ತವಾಗಿ ಕಳವಳವಾಗುವದು.
21:26b.LUK.021.026 ಆಕಾಶದ ಶಕ್ತಿಗಳು ಕದಲಿಸಲ್ಪಡುವದರಿಂದ ಮನುಷ್ಯರು ಭಯಹಿಡಿದವರಾಗಿ ಲೋಕಕ್ಕೆ ಏನು ಸಂಭವಿಸುವದೋ ಎಂದು ಎದುರುನೋಡುತ್ತಾ ಪ್ರಾಣಹೋದಂತಾಗುವರು.
21:27b.LUK.021.027 ಆಗ ಮನುಷ್ಯಕು ಮಾರನು ಬಲದಿಂದಲೂ ಮಹಾ ಮಹಿಮೆ ಯಿಂದಲೂ ಕೂಡಿದವನಾಗಿ ಮೇಘದಲ್ಲಿ ಬರುವದನ್ನು ಅವರು ಕಾಣುವರು;
21:28b.LUK.021.028 ಆದರೆ ಈ ಸಂಗತಿಗಳು ಸಂಭವಿಸುವದಕ್ಕೆ ಪ್ರಾರಂಭಿಸಿದಾಗ ಮೇಲಕ್ಕೆ ನೋಡಿರಿ; ನಿಮ್ಮ ತಲೆಗಳನ್ನು ಎತ್ತಿರಿ; ಯಾಕಂದರೆ ನಿಮ್ಮ ವಿಮೋಚನೆಯು ಸವಿಾಪವಾಗಿದೆ ಅಂದನು.
21:29b.LUK.021.029 ಆತನು ಅವರಿಗೆ ಒಂದು ಸಾಮ್ಯಕೊಟ್ಟು ಹೇಳಿದ್ದೇ ನಂದರೆ--ಅಂಜೂರದ ಮರವನ್ನು ಮತ್ತು ಎಲ್ಲಾ ಮರಗಳನ್ನು ನೋಡಿರಿ;
21:30b.LUK.021.030 ಅವು ಚಿಗುರಿದಾಗ ನೀವು ನೋಡಿ ಬೇಸಿಗೆಯು ಹತ್ತಿರವಾಯಿತೆಂದು ನೀವೇ ನೀವಾಗಿ ತಿಳಿದುಕೊಳ್ಳುವಿರಿ.
21:31b.LUK.021.031 ಅದೇ ಪ್ರಕಾರ ಇವೆಲ್ಲವುಗಳು ಸಂಭವಿಸುವದನ್ನು ನೀವು ನೋಡುವಾಗ ದೇವರ ರಾಜ್ಯವು ಹತ್ತಿರವಾಯಿತೆಂದು ತಿಳಿದುಕೊಳ್ಳಿರಿ.
21:32b.LUK.021.032 ಎಲ್ಲವುಗಳು ನೆರವೇರುವ ವರೆಗೆ ಈ ಸಂತತಿಯು ಅಳಿದು ಹೋಗುವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
21:33b.LUK.021.033 ಆಕಾಶವೂ ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ.
21:34b.LUK.021.034 ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ.
21:35b.LUK.021.035 ಯಾಕಂದರೆ ಅದು ಭೂಮಿಯ ಮೇಲೆ ವಾಸವಾಗಿರುವವರೆಲ್ಲರ ಮೇಲೆ ಉರ್ಲಿನಂತೆ ಬರುವದು.
21:36b.LUK.021.036 ಆದಕಾರಣ ಸಂಭವಿಸುವದಕ್ಕಿರುವ ಇವೆಲ್ಲವುಗಳಿಂದ ನೀವು ತಪ್ಪಿಸಿಕೊಳ್ಳುವದಕ್ಕೆ ಯೋಗ್ಯರೆಂದು ಎಣಿಸಲ್ಪಡು ವಂತೆಯೂ ಮನುಷ್ಯಕುಮಾರನ ಮುಂದೆ ನಿಂತು ಕೊಳ್ಳುವಂತೆಯೂ ಎಚ್ಚರವಾಗಿದ್ದು ಯಾವಾಗಲೂ ಪ್ರಾರ್ಥಿಸುತ್ತಾ ಇರ್ರಿ ಅಂದನು.
21:37b.LUK.021.037 ಆತನು ಹಗಲಿನಲ್ಲಿ ದೇವಾಲಯದೊಳಗೆ ಬೋಧಿಸುತ್ತಾ ಇದ್ದು ರಾತ್ರಿಯಲ್ಲಿ ಹೊರಗೆ ಹೋಗಿ ಎಣ್ಣೇ ಮರಗಳ ಗುಡ್ಡವೆಂದು ಕರೆಯಲ್ಪಟ್ಟ ಗುಡ್ಡ ದಲ್ಲಿ ವಾಸಿಸುತ್ತಿದ್ದನು.ಜನರೆಲ್ಲರೂ ಬೆಳಗಿನ ಜಾವದಲ್ಲಿ ಆತನ ಬಳಿಗೆ ದೇವಾಲಯದಲ್ಲಿ ಆತನ ಉಪದೇಶವನ್ನು ಕೇಳುವದಕ್ಕಾಗಿ ಬರುತ್ತಿದ್ದರು.
21:38b.LUK.021.038 ಜನರೆಲ್ಲರೂ ಬೆಳಗಿನ ಜಾವದಲ್ಲಿ ಆತನ ಬಳಿಗೆ ದೇವಾಲಯದಲ್ಲಿ ಆತನ ಉಪದೇಶವನ್ನು ಕೇಳುವದಕ್ಕಾಗಿ ಬರುತ್ತಿದ್ದರು.
22
22:1b.LUK.022.001 ಆಗ ಪಸ್ಕವೆಂಬ ಹುಳಿಯಿಲ್ಲದ ರೊಟ್ಟಿಯ ಹಬ್ಬವು ಸವಿಾಪವಾಗಿತ್ತು.
22:2b.LUK.022.002 ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಆತನನ್ನು ಹೇಗೆ ಕೊಲ್ಲ ಬೇಕೆಂದು ಹುಡುಕುತ್ತಿದ್ದರು. ಆದರೆ ಅವರು ಜನರಿಗೆ ಭಯಪಟ್ಟರು.
22:3b.LUK.022.003 ಹನ್ನೆರಡು ಮಂದಿಯಲ್ಲಿ ಎಣಿಕೆ ಯಾಗಿದ್ದ ಇಸ್ಕರಿಯೋತನೆಂಬ ಅಡ್ಡಹೆಸರಿನ ಯೂದ ನಲ್ಲಿ ಸೈತಾನನು ಪ್ರವೇಶಿಸಿದನು.
22:4b.LUK.022.004 ಅವನು ಪ್ರಧಾನ ಯಾಜಕರ ಬಳಿಗೂ ಸೈನ್ಯಾಧಿಪತಿಗಳ ಬಳಿಗೂ ಹೋಗಿ ತಾನು ಹೇಗೆ ಆತನನ್ನು ಅವರಿಗೆ ಹಿಡುಕೊಡುವ ದೆಂಬದನ್ನು ಅವರ ಕೂಡ ಮಾತನಾಡಿದನು.
22:5b.LUK.022.005 ಆಗ ಅವರು ಸಂತೋಷಪಟ್ಟು ಅವನಿಗೆ ಹಣ ಕೊಡುವದಕ್ಕೆ ಒಡಂಬಟ್ಟರು.
22:6b.LUK.022.006 ಅವನು ವಾಗ್ದಾನ ಮಾಡಿ ಜನ ಸಮೂಹವು ಇಲ್ಲದಿರುವಾಗ ಆತನನ್ನು ಅವರಿಗೆ ಹಿಡಿದುಕೊಡುವಂತೆ ಸಂದರ್ಭವನ್ನು ಹುಡುಕುತ್ತಿದ್ದನು.
22:7b.LUK.022.007 ಆಗ ಪಸ್ಕದ ಕುರಿಯು ವಧಿಸಲ್ಪಡಬೇಕಾಗಿದ್ದ ಹುಳಿಯಿಲ್ಲದ ರೊಟ್ಟಿಯ ದಿನವು ಬಂದಿತು.
22:8b.LUK.022.008 ಆತನು ಪೇತ್ರ ಯೋಹಾನರನ್ನು ಕಳುಹಿಸಿ--ನಾವು ಊಟ ಮಾಡುವಂತೆ ಹೋಗಿ ನಮಗೋಸ್ಕರ ಪಸ್ಕವನ್ನು ಸಿದ್ಧಮಾಡಿರಿ ಅಂದನು.
22:9b.LUK.022.009 ಅವರು ಆತನಿಗೆ--ನಾವು ಎಲ್ಲಿ ಸಿದ್ಧ ಮಾಡಬೇಕೆಂದು ನೀನು ಕೋರುತ್ತೀ ಅಂದರು.
22:10b.LUK.022.010 ಆಗ ಆತನು ಅವರಿಗೆ--ಇಗೋ, ನೀವು ಪಟ್ಟಣದೊಳಗೆ ಸೇರಿದಾಗ ಅಲ್ಲಿ ನೀರಿನ ಮಣ್ಣಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು; ಅವನು ಪ್ರವೇಶಿಸುವ ಮನೆಯೊಳಗೆ ನೀವು ಅವನ ಹಿಂದೆ ಹೋಗಿರಿ.
22:11b.LUK.022.011 ನೀವು ಆ ಮನೆಯ ಯಜಮಾನನಿಗೆ--ನಾನು ನನ್ನ ಶಿಷ್ಯರೊಂದಿಗೆ ಪಸ್ಕದ ಊಟ ಮಾಡುವ ದಕ್ಕಾಗಿ ಅತಿಥಿಯ ಕೊಠಡಿ ಎಲ್ಲಿ ಎಂದು ಬೋಧಕನು ನಿನ್ನನ್ನು ಕೇಳುತ್ತಾನೆ ಎಂದು ಹೇಳಿರಿ.
22:12b.LUK.022.012 ಅವನು ಸಜ್ಜುಗೊಳಿಸಿದ ಮೇಲಂತಸ್ತಿನ ದೊಡ್ಡ ಕೊಠಡಿಯನ್ನು ನಿಮಗೆ ತೋರಿಸುವನು, ಅಲ್ಲಿ ಸಿದ್ಧಮಾಡಿರಿ ಅಂದನು.
22:13b.LUK.022.013 ಅವರು ಹೊರಟು ಹೋಗಿ ಆತನು ತಮಗೆ ಹೇಳಿದಂತೆಯೇ ಕಂಡು ಪಸ್ಕವನ್ನು ಸಿದ್ದಮಾಡಿದರು.
22:14b.LUK.022.014 ಆ ಗಳಿಗೆ ಬಂದಾಗ ಆತನು ಹನ್ನೆರಡು ಮಂದಿ ಅಪೊಸ್ತಲರ ಸಂಗಡ ಕೂತುಕೊಂಡನು.
22:15b.LUK.022.015 ಆಗ ಆತನು ಅವರಿಗೆ--ನಾನು ಶ್ರಮೆಯನ್ನು ಅನುಭವಿಸು ವದಕ್ಕಿಂತ ಮುಂಚೆ ನಿಮ್ಮ ಸಂಗಡ ಈ ಪಸ್ಕ ಊಟಮಾಡುವದಕ್ಕೆ ಕುತೂಹಲದಿಂದ ಅಪೇಕ್ಷಿಸಿ ದ್ದೇನೆ
22:16b.LUK.022.016 ಇದು ದೇವರ ರಾಜ್ಯದೊಳಗೆ ನೆರವೇರುವ ತನಕ ನಾನು ಇನ್ನು ಮೇಲೆ ಇದನ್ನು ಊಟಮಾಡುವದೇ ಇಲ್ಲವೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
22:17b.LUK.022.017 ಆತನು ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರ ಮಾಡಿ--ಇದನ್ನು ತಕ್ಕೊಳ್ಳಿರಿ ಮತ್ತು ನಿಮ್ಮೊಳಗೆ ಹಂಚಿಕೊಳ್ಳಿರಿ ಅಂದನು.
22:18b.LUK.022.018 ನಾನು ನಿಮಗೆ ಹೇಳುವ ದೇನಂದರೆ--ದೇವರ ರಾಜ್ಯವು ಬರುವ ತನಕ ನಾನು ದ್ರಾಕ್ಷಾರಸವನ್ನು ಕುಡಿಯುವದೇ ಇಲ್ಲ ಅಂದನು.
22:19b.LUK.022.019 ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಅದನ್ನು ಮುರಿದು ಅವರಿಗೆ ಕೊಟ್ಟು--ಇದು ನಿಮಗೋಸ್ಕರ ಕೊಡಲ್ಪಟ್ಟ ನನ್ನ ದೇಹ; ನನ್ನ ನೆನಪಿ ಗಾಗಿ ನೀವು ಇದನ್ನು ಮಾಡಿರಿ ಅಂದನು.
22:20b.LUK.022.020 ಅದೇ ಪ್ರಕಾರ ಊಟವಾದ ಮೇಲೆ ಪಾತ್ರೆಯನ್ನು ತೆಗೆದು ಕೊಂಡು--ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪ ಡುವ ನನ್ನ ರಕ್ತದಿಂದಾದ ಹೊಸಒಡಂಬಡಿಕೆಯಾಗಿದೆ.
22:21b.LUK.022.021 ಆದರೂ ಇಗೋ, ನನ್ನನ್ನು ಹಿಡುಕೊಡುವವನ ಕೈ ನನ್ನ ಸಂಗಡ ಮೇಜಿನ ಮೇಲೆ ಇದೆ.
22:22b.LUK.022.022 ನಿರ್ಧರಿಸ ಲ್ಪಟ್ಟಂತೆಯೇ ಮನುಷ್ಯಕುಮಾರನು ನಿಜವಾಗಿಯೂ ಹೋಗುತ್ತಾನೆ; ಆದರೆ ಆತನನ್ನು ಹಿಡುಕೊಡುವ ಆ ಮನುಷ್ಯನಿಗೆ ಅಯ್ಯೋ! ಎಂದು ಹೇಳಿದನು.
22:23b.LUK.022.023 ಆಗ ಇದನ್ನು ಮಾಡುವದಕ್ಕಿರುವವನು ಯಾವನು ಎಂದು ಅವರು ತಮ್ಮೊಳಗೆ ವಿಚಾರಣೆ ಮಾಡಲಾರಂಭಿಸಿದರು.
22:24b.LUK.022.024 ಇದಲ್ಲದೆ ತಮ್ಮೊಳಗೆ ಯಾವನು ಅತಿ ದೊಡ್ಡವ ನೆಂದು ಎಣಿಸಲ್ಪಡುವನು ಎಂದು ಅವರಲ್ಲಿ ವಿವಾದವು ಸಹ ಇತ್ತು.
22:25b.LUK.022.025 ಆಗ ಆತನು ಅವರಿಗೆ--ಅನ್ಯಜನಗಳ ಅರಸರು ಅವರ ಮೇಲೆ ದೊರೆತನ ಮಾಡುತ್ತಾರೆ; ಅವರ ಮೇಲೆ ಅಧಿಕಾರವನ್ನು ನಡಿಸುವವರು ಉಪ ಕಾರಿಗಳೆಂದು ಕರೆಯಲ್ಪಡುತ್ತಾರೆ.
22:26b.LUK.022.026 ಆದರೆ ನೀವು ಹಾಗಿರಬಾರದು. ನಿಮ್ಮೊಳಗೆ ಅತಿದೊಡ್ಡವನಾಗಿರು ವವನು ಚಿಕ್ಕವನಂತೆ ಇರಲಿ; ಮುಖ್ಯಸ್ಥನಾಗಿರುವವನು ಸೇವೆ ಮಾಡುವವನಂತೆ ಇರಲಿ.
22:27b.LUK.022.027 ಹಾಗಾದರೆ ಯಾರು ದೊಡ್ಡವರು? ಊಟಕ್ಕೆ ಕೂತುಕೊಂಡಿರುವ ವನೋ ಇಲ್ಲವೆ ಸೇವೆ ಮಾಡುವವನೋ? ಊಟಕ್ಕೆ ಕೂತುಕೊಂಡವನಲ್ಲವೋ? ಆದರೆ ನಾನು ನಿಮ್ಮೊಳಗೆ ಸೇವೆ ಮಾಡುವವನಂತಿದ್ದೇನೆ.
22:28b.LUK.022.028 ಇದಲ್ಲದೆ ನನ್ನ ಸಂಗಡ ನನ್ನ ಕಷ್ಟಗಳಲ್ಲಿ ಎಡೆಬಿಡದೆ ಇದ್ದವರು ನೀವೇ.
22:29b.LUK.022.029 ನನ್ನ ತಂದೆಯು ನನಗೆ ರಾಜ್ಯವನ್ನು ನೇಮಕ ಮಾಡಿದ ಹಾಗೆಯೇ ನಾನೂ ನಿಮಗೆ ರಾಜ್ಯ ವನ್ನು ನೇಮಕ ಮಾಡುತ್ತೇನೆ.
22:30b.LUK.022.030 ಹೀಗೆ ನೀವು ನನ್ನ ರಾಜ್ಯದಲ್ಲಿ ನನ್ನ ಮೇಜಿನ ಬಳಿಯಲ್ಲಿ ತಿಂದು ಕುಡಿದು ಮತ್ತು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾ ಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ ಅಂದನು.
22:31b.LUK.022.031 ತರುವಾಯ ಕರ್ತನು--ಸೀಮೋನನೇ, ಸೀಮೋ ನನೇ, ಇಗೋ, ಸೈತಾನನು ನಿಮ್ಮನ್ನು ಗೋಧಿಯಂತೆ ಒನೆಯಬೇಕೆಂದು ಅಪೇಕ್ಷೆಪಟ್ಟಿದ್ದಾನೆ.
22:32b.LUK.022.032 ಆದರೆ ನಿನ್ನ ನಂಬಿಕೆಯು ಬಿದ್ದುಹೋಗದಂತೆ ನಾನು ನಿನಗೋಸ್ಕರ ಬೇಡಿಕೊಂಡಿದ್ದೇನೆ; ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ಬಲಪಡಿಸು ಎಂದು ಹೇಳಿದನು.
22:33b.LUK.022.033 ಆದರೆ ಅವನು ಆತನಿಗೆ--ಕರ್ತನೇ, ನಾನು ನಿನ್ನ ಜೊತೆಯಲ್ಲಿ ಸೆರೆಮನೆಗೆ ಹೋಗುವದಕ್ಕೂ ಸಾಯು ವದಕ್ಕೂ ಸಿದ್ಧನಾಗಿದ್ದೇನೆ ಅಂದನು.
22:34b.LUK.022.034 ಆದರೆ ಆತನು--ಪೇತ್ರನೇ, ನೀನು ನನ್ನನ್ನು ಅರಿಯೆನೆಂದು ಮೂರು ಸಾರಿ ಅಲ್ಲಗಳೆಯುವದಕ್ಕಿಂತ ಮುಂಚೆ ಈ ದಿವಸ ಹುಂಜ ಕೂಗುವದಿಲ್ಲ ಎಂದು ನಿನಗೆ ಹೇಳು ತ್ತೇನೆ ಅಂದನು.
22:35b.LUK.022.035 ಆತನು ಅವರಿಗೆ--ನಾನು ನಿಮ್ಮನ್ನು ಹವ್ಮೆಾಣಿ ಚೀಲ ಮತ್ತು ಕೆರಗಳಿಲ್ಲದೆ ಕಳುಹಿಸಿದಾಗ ನಿಮಗೆ ಏನಾದರೂ ಕೊರತೆಯಾಯಿತೋ ಎಂದು ಕೇಳಲು ಅವರು--ಏನೂ ಇಲ್ಲ ಅಂದರು.
22:36b.LUK.022.036 ಆಗ ಆತನು ಅವರಿಗೆ--ಆದರೆ ಈಗ ಹವ್ಮೆಾಣಿ ಇದ್ದವನು ಅದನ್ನು ತಕ್ಕೊಳ್ಳಲಿ. ಅದರಂತೆಯೇ ಚೀಲ ಇದ್ದವನು ಅದನ್ನು ತಕ್ಕೊಳ್ಳಲಿ; ಕತ್ತಿ ಇಲ್ಲದವನು ತನ್ನ ಬಟ್ಟೆಯನ್ನು ಮಾರಿ ಒಂದು ಕೊಂಡುಕೊಳ್ಳಲಿ.
22:37b.LUK.022.037 ಯಾಕಂದರೆ--ಆತನು ಅಕ್ರಮಗಾರರಲ್ಲಿ ಎಣಿಸಲ್ಪಟ್ಟವನು ಎಂಬದಾಗಿ ಬರೆ ಯಲ್ಪಟ್ಟದ್ದು ಇನ್ನೂ ನೆರವೇರತಕ್ಕದ್ದಾಗಿದೆ; ನನ್ನ ವಿಷಯ ವಾದವುಗಳು ಕೊನೆಗಾಣಬೇಕು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
22:38b.LUK.022.038 ಆಗ ಅವರು--ಕರ್ತನೇ, ಇಗೋ, ಇಲ್ಲಿ ಎರಡು ಕತ್ತಿಗಳಿವೆ ಅಂದರು. ಅದಕ್ಕೆ ಆತನು ಅವ ರಿಗೆ--ಅದು ಸಾಕಾ ಅಂದನು.
22:39b.LUK.022.039 ತರುವಾಯ ಆತನು ಹೊರಗೆ ಬಂದು ತನ್ನ ವಾಡಿಕೆಯಂತೆ ಎಣ್ಣೇಮರಗಳ ಗುಡ್ಡಕ್ಕೆ ಹೋದನು. ಆತನ ಶಿಷ್ಯರೂ ಆತನನ್ನು ಹಿಂಬಾಲಿಸಿದರು.
22:40b.LUK.022.040 ಆತನು ಆ ಸ್ಥಳದಲ್ಲಿದ್ದಾಗ ಅವರಿಗೆ--ನೀವು ಶೋಧನೆಗೆ ಒಳ ಗಾಗದಂತೆ ಪ್ರಾರ್ಥಿಸಿರಿ ಅಂದನು.
22:41b.LUK.022.041 ಆತನು ಅವ ರಿಂದ ಒಂದು ಕಲ್ಲೆಸೆಯುವಷ್ಟು ದೂರಹೋಗಿ ಮೊಣ ಕಾಲೂರಿ--
22:42b.LUK.022.042 ತಂದೆಯೇ, ನಿನ್ನ ಚಿತ್ತವಿದ್ದರೆ ಈ ಪಾತ್ರೆ ಯನ್ನು ನನ್ನಿಂದ ತೊಲಗಿಸು; ಹೇಗೂ ನನ್ನ ಚಿತ್ತವಲ್ಲ, ಆದರೆ ನಿನ್ನ ಚಿತ್ತದಂತೆಯೇ ಆಗಲಿ ಎಂದು ಪ್ರಾರ್ಥಿಸಿ ದನು.
22:43b.LUK.022.043 ಆಗ ಪರಲೋಕದಿಂದ ಒಬ್ಬ ದೂತನು ಆತನಿಗೆ ಪ್ರತ್ಯಕ್ಷನಾಗಿ ಆತನನ್ನು ಬಲಪಡಿಸುತ್ತಾ ಇದ್ದನು.
22:44b.LUK.022.044 ಆತನು ವೇದನೆಯಲ್ಲಿದ್ದು ಬಹಳ ಆಸಕ್ತಿ ಯಿಂದ ಪ್ರಾರ್ಥಿಸಿದನು. ಆತನ ಬೆವರು ನೆಲಕ್ಕೆ ಬೀಳುತ್ತಿರುವ ದೊಡ್ಡ ರಕ್ತದ ಹನಿಗಳೋಪಾದಿಯಲ್ಲಿತ್ತು.
22:45b.LUK.022.045 ಆತನು ಪ್ರಾರ್ಥನೆ ಮಾಡಿ ಎದ್ದಮೇಲೆ ತನ್ನ ಶಿಷ್ಯರ ಕಡೆಗೆ ಬಂದು ಅವರು ದುಃಖದ ನಿಮಿತ್ತವಾಗಿ ನಿದ್ರೆ ಮಾಡುತ್ತಿರುವದನ್ನು ಕಂಡು ಅವರಿಗೆ--
22:46b.LUK.022.046 ನೀವು ನಿದ್ರೆ ಮಾಡುವದು ಯಾಕೆ? ಶೋಧನೆಗೆ ಒಳಗಾಗ ದಂತೆ ಎದ್ದು ಪ್ರಾರ್ಥಿಸಿರಿ ಅಂದನು.
22:47b.LUK.022.047 ಆತನು ಇನ್ನೂ ಮಾತನಾಡುತ್ತಿರುವಾಗ ಇಗೋ, ಸಮೂಹವು ಮತ್ತು ಹನ್ನೆರಡು ಮಂದಿಯಲ್ಲಿ ಯೂದ ನೆಂದು ಕರೆಯಲ್ಪಟ್ಟ ಒಬ್ಬನು ಅವರ ಮುಂದೆ ಹೋಗುತ್ತಾ ಯೇಸುವಿಗೆ ಮುದ್ದಿಡುವದಕ್ಕಾಗಿ ಆತನನ್ನು ಸವಿಾಪಿಸಿದನು.
22:48b.LUK.022.048 ಆದರೆ ಯೇಸು ಅವನಿಗೆ-- ಯೂದನೇ, ಮುದ್ದಿನಿಂದ ಮನುಷ್ಯಕುಮಾರನನ್ನು ಹಿಡುಕೊಡುತ್ತೀಯೋ ಅಂದನು.
22:49b.LUK.022.049 ಆತನ ಸುತ್ತಲಿರು ವವರು ಮುಂದೆ ಸಂಭವಿಸುವದಕ್ಕಿರುವದನ್ನು ನೋಡಿ ಆತನಿಗೆ--ಕರ್ತನೇ, ನಾವು ಕತ್ತಿಯಿಂದ ಹೊಡೆಯೋ ಣವೋ? ಎಂದು ಕೇಳಿದರು.
22:50b.LUK.022.050 ಅವರಲ್ಲಿ ಒಬ್ಬನು ಪ್ರಧಾನಯಾಜಕನ ಆಳನ್ನು ಹೊಡೆದು ಅವನ ಬಲ ಕಿವಿಯನ್ನು ಕತ್ತರಿಸಿದನು.
22:51b.LUK.022.051 ಆದರೆ ಯೇಸು--ಇಷ್ಟಕ್ಕೆ ಬಿಡಿರಿ ಅಂದನು. ಆತನು ಅವನ ಕಿವಿಯನ್ನು ಮುಟ್ಟಿ ಅವನನ್ನು ಸ್ವಸ್ಥಪಡಿಸಿದನು.
22:52b.LUK.022.052 ಆಗ ಯೇಸು ತನ್ನ ಬಳಿಗೆ ಬಂದಿದ್ದ ಪ್ರಧಾನಯಾಜಕರಿಗೂ ದೇವಾಲ ಯದ ಅಧಿಪತಿಗಳಿಗೂ ಹಿರಿಯರಿಗೂ--ಕಳ್ಳನಿಗೆ ವಿರೋಧವಾಗಿ ಬಂದ ಹಾಗೆ ಕತ್ತಿಗಳಿಂದಲೂ ದೊಣ್ಣೆ ಗಳಿಂದಲೂ ನೀವು ಹೊರಟು ಬಂದಿರೋ?
22:53b.LUK.022.053 ನಾನು ನಿಮ್ಮ ಸಂಗಡ ಪ್ರತಿದಿನವೂ ದೇವಾಲಯದಲ್ಲಿದ್ದಾಗ ನೀವು ನನಗೆ ವಿರೋಧವಾಗಿ ಕೈ ಚಾಚಲಿಲ್ಲ; ಆದರೆ ಇದು ನಿಮ್ಮ ಗಳಿಗೆಯೂ ಅಂಧಕಾರದ ಶಕ್ತಿಯೂ ಆಗಿದೆ ಅಂದನು.
22:54b.LUK.022.054 ಆಗ ಅವರು ಆತನನ್ನು ತೆಗೆದುಕೊಂಡು ಮಹಾ ಯಾಜಕನ ಮನೆಯೊಳಕ್ಕೆ ಸಾಗಿಸಿಕೊಂಡು ಬಂದರು. ಪೇತ್ರನು ದೂರದಿಂದ ಹಿಂಬಾಲಿಸಿದನು.
22:55b.LUK.022.055 ಅವರು ಅಂಗಳದ ನಡುವೆ ಬೆಂಕಿ ಉರಿಸಿ ಒಟ್ಟಾಗಿ ಕೂತು ಕೊಂಡಾಗ ಪೇತ್ರನೂ ಅವರ ನಡುವೆ ಕೂತು ಕೊಂಡನು.
22:56b.LUK.022.056 ಆದರೆ ಒಬ್ಬ ಹುಡುಗಿಯು ಬೆಂಕಿಯ ಬಳಿಯಲ್ಲಿ ಕೂತುಕೊಂಡಿದ್ದ ಪೇತ್ರನನ್ನು ದೃಷ್ಟಿಸಿ ನೋಡಿ--ಈ ಮನುಷ್ಯನು ಸಹ ಆತನೊಂದಿಗೆ ಇದ್ದ ವನು ಅಂದಳು.
22:57b.LUK.022.057 ಆದರೆ ಅವನು ಆತನನ್ನು ಅಲ್ಲ ಗಳೆದು--ಸ್ತ್ರೀಯೇ, ನಾನು ಅವನನ್ನು ಅರಿಯೆನು ಅಂದನು.
22:58b.LUK.022.058 ಸ್ವಲ್ಪ ಸಮಯದ ಮೇಲೆ ಮತ್ತೊಬ್ಬನು ಅವನನ್ನು ನೋಡಿ--ನೀನು ಸಹ ಅವರಲ್ಲಿ ಇದ್ದವನು ಅಂದನು. ಅದಕ್ಕೆ ಪೇತ್ರನು--ಮನುಷ್ಯನೇ, ನಾನಲ್ಲ ಅಂದನು.
22:59b.LUK.022.059 ಹೆಚ್ಚು ಕಡಿಮೆ ಒಂದು ತಾಸು ಕಳೆದ ನಂತರ ಮತ್ತೊಬ್ಬನು ದೃಢನಿಶ್ಚಯವಾಗಿ--ನಿಜವಾ ಗಿಯೂ ಇವನು ಸಹ ಅವನೊಂದಿಗೆ ಇದ್ದನು; ಯಾಕಂದರೆ ಇವನು ಗಲಿಲಾಯದವನಾಗಿದ್ದಾನೆ ಅಂದನು.
22:60b.LUK.022.060 ಆದರೆ ಪೇತ್ರನು--ಮನುಷ್ಯನೇ, ನೀನು ಏನು ಹೇಳುತ್ತೀಯೋ ನಾನರಿಯೆ ಅಂದನು. ಕೂಡಲೆ ಅವನು ಇನ್ನೂ ಮಾತನಾಡುತ್ತಿರುವಾಗಲೇ ಹುಂಜ ಕೂಗಿತು.
22:61b.LUK.022.061 ಆಗ ಕರ್ತನು ತಿರುಗಿಕೊಂಡು ಪೇತ್ರನ ಕಡೆಗೆ ನೋಡಿದನು; ಆಗ ಪೇತ್ರನು--ಹುಂಜ ಕೂಗುವದಕ್ಕಿಂತ ಮುಂಚಿತವಾಗಿ ಮೂರು ಸಾರಿ ನೀನು ನನ್ನನ್ನು ಅಲ್ಲಗಳೆಯುವಿ ಎಂದು ಕರ್ತನು ಹೇಳಿದ್ದ ಮಾತನ್ನು ನೆನಪು ಮಾಡಿಕೊಂಡನು.
22:62b.LUK.022.062 ಆಗ ಪೇತ್ರನು ಹೊರಗೆಹೋಗಿ ಬಹು ವ್ಯಥೆಪಟ್ಟು ಅತ್ತನು.
22:63b.LUK.022.063 ಯೇಸುವನ್ನು ಹಿಡಿದ ಜನರು ಆತನಿಗೆ ಹಾಸ್ಯ ಮಾಡಿ ಆತನನ್ನು ಹೊಡೆದರು.
22:64b.LUK.022.064 ಇದಲ್ಲದೆ ಅವರು ಆತನ ಕಣ್ಣುಕಟ್ಟಿ ಆತನ ಮುಖದ ಮೇಲೆ ಹೊಡೆದು ಆತನಿಗೆ--ನಿನ್ನನ್ನು ಹೊಡೆದವರು ಯಾರು? ಪ್ರವಾ ದನೆ ಹೇಳು ಎಂದು ಕೇಳಿದರು.
22:65b.LUK.022.065 ಅವರು ಆತನಿಗೆ ವಿರೋಧವಾಗಿ ಅನೇಕ ದೂಷಣೆಯ ಮಾತುಗಳ ನ್ನಾಡಿದರು.
22:66b.LUK.022.066 ಬೆಳಗಾದ ಕೂಡಲೆ ಜನರ ಹಿರಿಯರೂ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಒಟ್ಟಾಗಿ ಬಂದು ಆತನನ್ನು ತಮ್ಮ ಆಲೋಚನಾ ಸಭೆಗೆ ಸಾಗಿಸಿಕೊಂಡು ಹೋಗಿ--
22:67b.LUK.022.067 ನೀನು ಆ ಕ್ರಿಸ್ತನೋ? ನಮಗೆ ಹೇಳು ಅಂದರು. ಆತನು ಅವರಿಗೆ--ನಾನು ನಿಮಗೆ ಹೇಳಿ ದರೆ ನೀವು ನಂಬುವದಿಲ್ಲ;
22:68b.LUK.022.068 ನಾನು ಸಹ ನಿಮ್ಮನ್ನು ಕೇಳುವದಾದರೆ ನೀವು ಉತ್ತರ ಕೊಡುವದಿಲ್ಲ; ಇಲ್ಲವೆ ನನ್ನನ್ನು ಹೋಗಗೊಡಿಸುವದಿಲ್ಲ.
22:69b.LUK.022.069 ಇಂದಿನಿಂದ ಮನುಷ್ಯಕುಮಾರನು ದೇವರ ಬಲಪಾರ್ಶ್ವದಲ್ಲಿ ಕೂತು ಕೊಂಡಿರುವನು ಅಂದನು.
22:70b.LUK.022.070 ಆಗ ಅವರೆಲ್ಲರೂ--ಹಾಗಾದರೆ ನೀನು ದೇವರ ಮಗನೋ ಎಂದು ಕೇಳಿ ದರು. ಅದಕ್ಕೆ ಆತನು ಅವನಿಗೆ--ನಾನೇ ಎಂದು ನೀವು ಹೇಳುತ್ತೀರಿ ಅಂದನು.ಆಗ ಅವರು--ನಮಗೆ ಇನ್ನು ಹೆಚ್ಚಿನ ಸಾಕ್ಷಿಯು ಯಾಕೆ ಬೇಕು? ನಾವೇ ಈತನ ಬಾಯಿಂದ ಕೇಳಿದ್ದೇವೆ ಅಂದರು.
22:71b.LUK.022.071 ಆಗ ಅವರು--ನಮಗೆ ಇನ್ನು ಹೆಚ್ಚಿನ ಸಾಕ್ಷಿಯು ಯಾಕೆ ಬೇಕು? ನಾವೇ ಈತನ ಬಾಯಿಂದ ಕೇಳಿದ್ದೇವೆ ಅಂದರು.
23
23:1b.LUK.023.001 ಆಗ ಜನಸಮೂಹವೆಲ್ಲವೂ ಎದ್ದು ಆತನನ್ನು ಪಿಲಾತನ ಬಳಿಗೆ ತೆಗೆದು ಕೊಂಡು ಹೋದರು.
23:2b.LUK.023.002 ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು.
23:3b.LUK.023.003 ಆಗ ಪಿಲಾತನು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವನಿಗೆ--ನೀನೇ ಹೇಳುತ್ತೀ ಅಂದನು.
23:4b.LUK.023.004 ತರುವಾಯ ಪಿಲಾತನು ಪ್ರಧಾ ನಯಾಜಕರಿಗೂ ಜನರಿಗೂ--ಈ ಮನುಷ್ಯನಲ್ಲಿ ನಾನು ಯಾವ ತಪ್ಪನ್ನೂ ಕಾಣಲಿಲ್ಲ ಅಂದನು.
23:5b.LUK.023.005 ಅದಕ್ಕೆ ಅವರು ಹೆಚ್ಚು ಉಗ್ರತೆಯಿಂದ--ಈತನು ಗಲಿಲಾಯ ಮೊದಲುಗೊಂಡು ಈ ಸ್ಥಳದ ವರೆಗೂ ಎಲ್ಲಾ ಯೂದಾ ಯದಲ್ಲಿ ಬೋಧಿಸುತ್ತಾ ಜನರನ್ನು ರೇಗಿಸುತ್ತಾನೆ ಎಂದು ಹೇಳಿದರು.
23:6b.LUK.023.006 ಪಿಲಾತನು ಗಲಿಲಾಯದ ವಿಷಯ ವಾಗಿ ಕೇಳಿ--ಆ ಮನುಷ್ಯನು ಗಲಿಲಾಯದವನೋ ಎಂದು ಅವನು ವಿಚಾರಿಸಿ
23:7b.LUK.023.007 ಆತನು ಹೆರೋದನ ಅಧಿಕಾರದ ವಿಭಾಗಕ್ಕೆ ಸಂಬಂಧಪಟ್ಟವನೆಂದು ತಿಳಿದ ಕೂಡಲೆ ಆ ಸಮಯದಲ್ಲಿ ಯೆರೂಸಲೇಮಿನಲ್ಲಿಯೇ ಇದ್ದ ಹೆರೋದನ ಬಳಿಗೆ ಆತನನ್ನು ಕಳುಹಿಸಿದನು.
23:8b.LUK.023.008 ಹೆರೋದನು ಯೇಸುವನ್ನು ನೋಡಿದಾಗ ಅತ್ಯಂತ ಸಂತೋಷಪಟ್ಟನು; ಯಾಕಂದರೆ ಅವನು ಆತನ ವಿಷಯವಾಗಿ ಅನೇಕ ಸಂಗತಿಗಳನ್ನು ಕೇಳಿದ್ದರಿಂದ ಆತನನ್ನು ನೋಡುವಂತೆ ಬಹಳ ಕಾಲದಿಂದ ಆಶೆಪಟ್ಟಿ ದ್ದನು. ಆತನಿಂದಾಗುವ ಅದ್ಭುತ ಕಾರ್ಯವನ್ನು ನೋಡ ಲು ನಿರೀಕ್ಷಿಸುತ್ತಿದ್ದನು.
23:9b.LUK.023.009 ಆಗ ಅವನು ಆತನನ್ನು ಅನೇಕ ಮಾತುಗಳಿಂದ ಪ್ರಶ್ನಿಸಿದಾಗ್ಯೂ ಆತನು ಅವನಿಗೆ ಏನೂ ಉತ್ತರಕೊಡಲಿಲ್ಲ.
23:10b.LUK.023.010 ಆಗ ಪ್ರಧಾನಯಾಜಕರೂ ಶಾಸ್ತ್ರಿಗಳೂ ನಿಂತುಕೊಂಡು ಉಗ್ರತೆಯಿಂದ ಆತನ ಮೇಲೆ ದೂರು ಹೇಳಿದರು.
23:11b.LUK.023.011 ಹೆರೋದನು ತನ್ನ ಯುದ್ಧಭಟರೊಂದಿಗೆ ಆತನನ್ನು ತಿರಸ್ಕರಿಸಿ ಹಾಸ್ಯಮಾಡಿ ಆತನ ಮೇಲೆ ಶೋಭಾಯಮಾನವಾದ ವಸ್ತ್ರವನ್ನು ಹೊದಿಸಿ ಆತನನ್ನು ತಿರಿಗಿ ಪಿಲಾತನ ಬಳಿಗೆ ಕಳುಹಿಸಿ ದನು.
23:12b.LUK.023.012 ಇದಲ್ಲದೆ ಪಿಲಾತನು ಹೆರೋದನು ಅದೇ ದಿನದಲ್ಲಿ ಒಬ್ಬರಿಗೊಬ್ಬರು ಸ್ನೇಹಿತರಾದರು; ಯಾಕಂ ದರೆ ಅವರಲ್ಲಿ ಮೊದಲು ಹಗೆತನವಿತ್ತು.
23:13b.LUK.023.013 ಪಿಲಾತನು ಪ್ರಧಾನಯಾಜಕರನ್ನೂ ಅಧಿಕಾರಿಗಳ ನ್ನೂ ಜನರನ್ನೂ ಒಟ್ಟಾಗಿ ಕರೆಸಿ ಅವರಿಗೆ--
23:14b.LUK.023.014 ಜನರು ತಿರಿಗಿ ಬೀಳುವಂತೆ ಮಾಡುತ್ತಾನೆಂದು ನೀವು ಈ ಮನುಷ್ಯನನ್ನು ನನ್ನ ಬಳಿಗೆ ತಂದಿದ್ದೀರಿ; ಇಗೋ, ನೀವು ಈತನ ಮೇಲೆ ತಂದಿರುವ ದೂರುಗಳನ್ನು ನಾನು ನಿಮ್ಮ ಮುಂದೆಯೇ ವಿಚಾರಿಸಿದಾಗ ಈತನಲ್ಲಿ ನನಗೆ ಯಾವ ತಪ್ಪೂ ಕಾಣಲಿಲ್ಲ.
23:15b.LUK.023.015 ಮಾತ್ರವಲ್ಲದೆ ಹೆರೋದ ನಿಗೆ ಸಹ ಯಾವದೂ ಕಾಣಲಿಲ್ಲ; ಯಾಕಂದರೆ ನಾನು ನಿಮ್ಮನ್ನು ಅವನ ಬಳಿಗೆ ಕಳುಹಿಸಿದೆನು; ಇಗೋ, ಅವನೂ ಆತನಲ್ಲಿ ಮರಣಕ್ಕೆ ಯೋಗ್ಯವಾದದ್ದೇನೂ ಕಾಣಲಿಲ್ಲ.
23:16b.LUK.023.016 ಹೀಗಿರುವದರಿಂದ ನಾನು ಆತನನ್ನು ಹೊಡಿಸಿ ಬಿಟ್ಟುಬಿಡುವೆನು ಅಂದನು.
23:17b.LUK.023.017 ಯಾಕಂದರೆ ಅಧಿಪತಿಯು ಒಬ್ಬನನ್ನು ಹಬ್ಬದಲ್ಲಿ ಅವರಿಗಾಗಿ ಬಿಡಿಸು ವದು ಅವಶ್ಯವಾಗಿತ್ತು).
23:18b.LUK.023.018 ಆಗ ಅವರೆಲ್ಲರೂ ಆ ಕ್ಷಣವೇ--ಈತನನ್ನು ತೆಗೆದುಹಾಕಿ ನಮಗೆ ಬರಬ್ಬ ನನ್ನು ಬಿಟ್ಟುಕೊಡು ಎಂದು ಕೂಗುತ್ತಾ ಹೇಳಿದರು.
23:19b.LUK.023.019 (ಬರಬ್ಬನು ಪಟ್ಟಣದಲ್ಲಿ ನಡೆದ ಒಂದಾನೊಂದು ದಂಗೆಯ ಮತ್ತು ಕೊಲೆಯ ನಿಮಿತ್ತ ಸೆರೆಯಲ್ಲಿ ಹಾಕಲ್ಪ ಟ್ಟವನಾಗಿದ್ದನು).
23:20b.LUK.023.020 ಆದದರಿಂದ ಪಿಲಾತನು ಯೇಸು ವನ್ನು ಬಿಡಿಸಬೇಕೆಂದು ಮನಸ್ಸುಳ್ಳವನಾಗಿ ಮತ್ತೊಮ್ಮೆ ಅವರೊಂದಿಗೆ ಮಾತನಾಡಿದನು.
23:21b.LUK.023.021 ಆದರೆ ಅವರು--ಅವನನ್ನು ಶಿಲುಬೆಗೆ ಹಾಕಿಸು, ಅವನನ್ನು ಶಿಲುಬೆಗೆ ಹಾಕಿಸು ಎಂದು ಕೂಗುತ್ತಾ ಹೇಳಿದರು.
23:22b.LUK.023.022 ಆದರೆ ಅವನು ಮೂರನೆಯ ಸಾರಿ ಅವ ರಿಗೆ--ಯಾಕೆ? ಈತನು ಕೆಟ್ಟದ್ದೇನು ಮಾಡಿದ್ದಾನೆ? ಈತನಲ್ಲಿ ಮರಣಕ್ಕೆ ಕಾರಣವಾದದ್ದೇನೂ ನನಗೆ ಕಾಣ ಲಿಲ್ಲ; ಆದದರಿಂದ ನಾನು ಈತನನ್ನು ಹೊಡಿಸಿ ಬಿಟ್ಟು ಬಿಡುತ್ತೇನೆ ಅಂದನು.
23:23b.LUK.023.023 ಆದರೆ ಆತನು ಶಿಲುಬೆಗೆ ಹಾಕಲ್ಪಡಬೇಕೆಂದು ಅವರು ಮಹಾಧ್ವನಿಯಿಂದ ಒತ್ತಾಯ ಮಾಡಿದರು. ಹೀಗೆ ಅವರ ಕೂಗಾಟವೂ ಪ್ರಧಾನಯಾಜಕರ ಕೂಗಾಟವೂ ಗೆದ್ದಿತು.
23:24b.LUK.023.024 ಆಗ ಪಿಲಾತನು ಅವರು ಕೇಳಿಕೊಂಡಂತೆ ಆಗಲಿ ಎಂದು ನಿರ್ಣಯಿಸಿದನು.
23:25b.LUK.023.025 ಇದಲ್ಲದೆ ಅವರು ಇಷ್ಟಪಟ್ಟವ ನನ್ನು ಅಂದರೆ ದಂಗೆಯ ಮತ್ತು ಕೊಲೆಯ ನಿಮಿತ್ತ ಸೆರೆಮನೆಯೊಳಗೆ ಹಾಕಲ್ಪಟ್ಟವನನ್ನು ಅವರಿಗೆ ಬಿಟ್ಟು ಕೊಟ್ಟು ಯೇಸುವನ್ನು ಅವರ ಇಷ್ಟಕ್ಕೆ ಒಪ್ಪಿಸಿದನು.
23:26b.LUK.023.026 ಅವರು ಆತನನ್ನು ತೆಗೆದುಕೊಂಡು ಹೋಗುತ್ತಿ ರುವಾಗ ಹೊಲದಿಂದ ಬರುತ್ತಿದ್ದ ಕುರೇನ್ಯದವನಾದ ಸೀಮೋನನೆಂಬವನನ್ನು ಹಿಡಿದು ಅವನ ಮೇಲೆ ಶಿಲು ಬೆಯನ್ನು ಇಟ್ಟು ಯೇಸುವಿನ ಹಿಂದೆ ಹೊತ್ತುಕೊಂಡು ಹೋಗುವಂತೆ ಮಾಡಿದರು.
23:27b.LUK.023.027 ಆಗ ಜನರ ದೊಡ್ಡ ಗುಂಪೂ ಸ್ತ್ರೀಯರೂ ಆತನಿ ಗಾಗಿ ಶೋಕಿಸುತ್ತಾ ಗೋಳಾಡುತ್ತಾ ಆತನನ್ನು ಹಿಂಬಾ ಲಿಸಿದರು.
23:28b.LUK.023.028 ಆದರೆ ಯೇಸು ಅವರ ಕಡೆಗೆ ತಿರುಗಿ ಕೊಂಡು--ಯೆರೂಸಲೇಮಿನ ಕುಮಾರ್ತೆಯರೇ, ನನ ಗಾಗಿ ಅಳಬೇಡಿರಿ; ಆದರೆ ನಿಮಗಾಗಿಯೂ ನಿಮ್ಮ ಮಕ್ಕಳಿಗಾಗಿಯೂ ಅಳಿರಿ.
23:29b.LUK.023.029 ಯಾಕಂದರೆ--ಇಗೋ, ಬಂಜೆಯರೂ ಎಂದಿಗೂ ಗರ್ಭಿಣಿಯಾಗದವರೂ ಎಂದಿಗೂ ಮೊಲೆ ಕುಡಿಸದವರೂ ಧನ್ಯರು ಎಂದು ಹೇಳುವ ದಿವಸಗಳು ಬರುತ್ತವೆ.
23:30b.LUK.023.030 ಆಗ ಅವರು ಬೆಟ್ಟಗಳಿಗೆ--ನಮ್ಮ ಮೇಲೆ ಬೀಳಿರಿ; ಗುಡ್ಡಗಳಿಗೆ-- ನಮ್ಮನ್ನು ಮುಚ್ಚಿಕೊಳ್ಳಿರಿ ಎಂದು ಹೇಳಲಾರಂಭಿಸು ವರು.
23:31b.LUK.023.031 ಅವರು ಹಸಿರಾಗಿರುವ ಮರಕ್ಕೆ ಇವುಗಳನ್ನು ಮಾಡಿದರೆ ಒಣಗಿದ ಮರಕ್ಕೆ ಏನು ಮಾಡಿಯಾರು ಅಂದನು.
23:32b.LUK.023.032 ಇದಲ್ಲದೆ ದುಷ್ಕರ್ಮಿಗಳಾದ ಬೇರೆ ಇಬ್ಬರನ್ನು ಆತನೊಂದಿಗೆ ಕೊಲ್ಲುವದಕ್ಕಾಗಿ ತೆಗೆದುಕೊಂಡು ಹೋದರು.
23:33b.LUK.023.033 ಅವರು ಕಲ್ವಾರಿ ಎಂದು ಕರೆಯಲ್ಪಡುವ ಸ್ಥಳಕ್ಕೆ ಬಂದಾಗ ಅಲ್ಲಿ ಆತನನ್ನು ಮತ್ತು ಆ ದುಷ್ಕರ್ಮಿಗಳಲ್ಲಿ ಒಬ್ಬನನ್ನು ಬಲಗಡೆಯಲ್ಲಿ ಮತ್ತೊಬ್ಬನನ್ನು ಎಡಗಡೆ ಯಲ್ಲಿ ಶಿಲುಬೆಗೆ ಹಾಕಿದರು.
23:34b.LUK.023.034 ಆಗ ಯೇಸು--ತಂದೆಯೇ, ಅವರನ್ನು ಕ್ಷಮಿಸು; ಯಾಕಂದರೆ ತಾವು ಏನು ಮಾಡುತ್ತೇವೆಂದು ಅವರು ಅರಿಯರು ಅಂದನು. ಅವರು ಆತನ ಉಡುಪನ್ನು ಪಾಲು ಮಾಡಿ ಚೀಟು ಹಾಕಿದರು.
23:35b.LUK.023.035 ಜನರು ನೋಡುತ್ತಾ ನಿಂತುಕೊಂಡಿ ದ್ದರು. ಆಗ ಅವರೊಂದಿಗೆ ಅಧಿಕಾರಿಗಳು ಸಹ ಆತ ನಿಗೆ ಅಪಹಾಸ್ಯ ಮಾಡಿ--ಈತನು ಬೇರೆಯವರನ್ನು ರಕ್ಷಿಸಿದನು; ಇವನು ದೇವರು ಆರಿಸಿಕೊಂಡ ಕ್ರಿಸ್ತನಾಗಿ ದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ ಅಂದರು.
23:36b.LUK.023.036 ಸೈನಿ ಕರು ಸಹ ಆತನ ಬಳಿಗೆ ಬಂದು ಆತನಿಗೆ ಹಾಸ್ಯ ಮಾಡಿ ಹುಳಿರಸವನ್ನು ಕೊಟ್ಟು
23:37b.LUK.023.037 ಆತನಿಗೆ--ನೀನು ಯೆಹೂದ್ಯರ ಅರಸನಾಗಿದ್ದರೆ ನಿನ್ನನ್ನು ನೀನೇ ರಕ್ಷಿಸಿಕೋ ಅಂದರು.
23:38b.LUK.023.038 ಇದಲ್ಲದೆ ಆತನ ಮೇಲ್ಗಡೆಯಲ್ಲಿ--ಈತನು ಯೆಹೂದ್ಯರ ಅರಸನು ಎಂಬ ಮೇಲ್ಬರಹವು ಸಹ ಗ್ರೀಕ್ ಲ್ಯಾಟಿನ್ ಮತ್ತು ಇಬ್ರಿಯ ಅಕ್ಷರಗಳಲ್ಲಿ ಬರೆಯಲ್ಪಟ್ಟಿತ್ತು.
23:39b.LUK.023.039 ತೂಗುಹಾಕಲ್ಪಟ್ಟಿದ್ದ ದುಷ್ಕರ್ಮಿಗಳಲ್ಲಿ ಒಬ್ಬನು ಆತನನ್ನು ದೂಷಿಸಿ--ನೀನು ಕ್ರಿಸ್ತನಾಗಿದ್ದರೆ ನಿನ್ನನ್ನು ರಕ್ಷಿಸಿಕೊಂಡು ನಮ್ಮನ್ನೂ ರಕ್ಷಿಸು ಅಂದನು.
23:40b.LUK.023.040 ಆದರೆ ಮತ್ತೊಬ್ಬನು ಪ್ರತ್ಯುತ್ತರವಾಗಿ ಅವನನ್ನು ಗದರಿಸಿ--ನೀನು ಇದೇ ದಂಡನೆಯಲ್ಲಿರುವದನ್ನು ನೋಡಿಯೂ ದೇವರಿಗೆ ಭಯಪಡುವದಿಲ್ಲವೋ?
23:41b.LUK.023.041 ನಾವಂತೂ ನ್ಯಾಯವಾಗಿಯೇ ನಮ್ಮ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಹೊಂದುತ್ತಾ ಇದ್ದೇವೆ; ಈತನಾದರೋ ತಪ್ಪಾದದ್ದೇನೂ ಮಾಡಲಿಲ್ಲ ಅಂದನು.
23:42b.LUK.023.042 ಇದಲ್ಲದೆ ಅವನು ಯೇಸು ವಿಗೆ--ಕರ್ತನೇ, ನೀನು ನಿನ್ನ ರಾಜ್ಯದಲ್ಲಿ ಬರುವಾಗ ನನ್ನನ್ನು ನೆನಪು ಮಾಡಿಕೋ ಅಂದನು.
23:43b.LUK.023.043 ಆಗ ಯೇಸು ಅವನಿಗೆ--ಈ ದಿನವೇ ನೀನು ನನ್ನೊಂದಿಗೆ ಪರದೈಸಿನಲ್ಲಿರುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.
23:44b.LUK.023.044 ಆಗ ಸುಮಾರು ಆರನೇತಾಸಾಗಿತ್ತು; ಒಂಭತ್ತನೇ ತಾಸಿನವರೆಗೆ ಭೂಮಿಯ ಮೇಲೆಲ್ಲಾ ಕತ್ತಲೆ ಕವಿಯಿತು.
23:45b.LUK.023.045 ಇದಲ್ಲದೆ ಸೂರ್ಯನು ಕತ್ತಲಾದನು; ದೇವಾಲಯದ ತೆರೆಯು ಮಧ್ಯದಲ್ಲಿ ಹರಿಯಿತು.
23:46b.LUK.023.046 ಯೇಸು ಮಹಾಧ್ವನಿಯಿಂದ--ತಂದೆಯೇ, ನಾನು ನನ್ನ ಆತ್ಮವನ್ನು ನಿನ್ನ ಕೈಗಳಲ್ಲಿ ಒಪ್ಪಿಸುತ್ತೇನೆ ಎಂದು ಕೂಗಿ ಹೇಳಿದನು; ಹೀಗೆ ಹೇಳಿದ ಮೇಲೆ ಆತನು ಪ್ರಾಣಬಿಟ್ಟನು.
23:47b.LUK.023.047 ಆಗ ಶತಾಧಿ ಪತಿಯು ನಡೆದದ್ದನ್ನು ನೋಡಿ--ನಿಶ್ಚಯವಾಗಿ ಈತನು ನೀತಿವಂತನಾಗಿದ್ದನು ಎಂದು ಹೇಳಿ ದೇವರನ್ನು ಮಹಿಮೆಪಡಿಸಿದನು.
23:48b.LUK.023.048 ಆ ನೋಟಕ್ಕಾಗಿ ಬಂದಿದ್ದ ಎಲ್ಲಾ ಜನರು ನಡೆದ ಸಂಭವಗಳನ್ನು ನೋಡುತ್ತಾ ತಮ್ಮ ಎದೆಗಳನ್ನು ಬಡುಕೊಂಡು ಹಿಂದಿರುಗಿದರು.
23:49b.LUK.023.049 ಆತನಿಗೆ ಪರಿಚಯವಿದ್ದವರೆಲ್ಲರೂ ಗಲಿಲಾಯ ದಿಂದ ಆತನನ್ನು ಹಿಂಬಾಲಿಸಿದ ಸ್ತ್ರೀಯರೂ ದೂರದಲ್ಲಿ ನಿಂತು ಇವುಗಳನ್ನು ನೋಡುತ್ತಿದ್ದರು.
23:50b.LUK.023.050 ಆಗ ಇಗೋ, ಅಲ್ಲಿ ಯೋಸೇಫನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು; ಅವನು ಆಲೋಚನಾ ಸಭೆಯವನೂ ಒಳ್ಳೆಯವನೂ ನೀತಿವಂತನೂ ಆಗಿ ದ್ದನು.
23:51b.LUK.023.051 ಇವನು ಯೆಹೂದ್ಯರ ಪಟ್ಟಣವಾದ ಅರಿಮ ಥಾಯದವನೂ ದೇವರ ರಾಜ್ಯಕ್ಕಾಗಿ ಎದುರು ನೋಡು ವವನೂ ಆಗಿದ್ದನು. (ಅವನು ಅವರ ಆಲೋಚನೆಗೂ ಕೃತ್ಯಕ್ಕೂ ಒಪ್ಪಿಕೊಂಡಿರಲಿಲ್ಲ.)
23:52b.LUK.023.052 ಇವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹಕ್ಕಾಗಿ ಬೇಡಿ ಕೊಂಡನು.
23:53b.LUK.023.053 ಇವನು ಅದನ್ನು ಕೆಳಗೆ ಇಳಿಸಿ ನಾರು ಬಟ್ಟೆಯಲ್ಲಿ ಸುತ್ತಿ ಬಂಡೆಯಲ್ಲಿ ತೋಡಿದ ಸಮಾಧಿಯಲ್ಲಿ ಇಟ್ಟನು. ಮೊದಲು ಯಾರನ್ನೂ ಅದರಲ್ಲಿ ಇಟ್ಟಿರಲಿಲ್ಲ.
23:54b.LUK.023.054 ಸಬ್ಬತ್ತಿಗೆ ಸವಿಾಪವಾಗಿದ್ದ ಆ ದಿನವು ಸಿದ್ಧತೆಯ ದಿನವಾಗಿತ್ತು.
23:55b.LUK.023.055 ಇದಲ್ಲದೆ ಗಲಿಲಾಯದಿಂದ ಆತ ನೊಂದಿಗೆ ಬಂದಿದ್ದ ಸ್ತ್ರೀಯರು ಸಹ ಹಿಂಬಾಲಿಸಿ ಹೋಗಿ ಸಮಾಧಿಯನ್ನೂ ಆ ಸಮಾಧಿಯಲ್ಲಿ ಆತನ ದೇಹವನ್ನು ಹೇಗೆ ಇಟ್ಟರೆಂಬದನ್ನೂ ನೋಡಿದರು.ಅವರು ಹಿಂತಿರುಗಿದವರಾಗಿ ಪರಿಮಳ ದ್ಯವ್ಯವನ್ನು ಸುಗಂಧ ತೈಲವನ್ನೂ ಸಿದ್ಧಪಡಿಸಿಕೊಂಡು ಆಜ್ಞಾನು ಸಾರವಾಗಿ ಸಬ್ಬತ್ತಿನ ದಿನದಲ್ಲಿ ವಿಶ್ರಮಿಸಿಕೊಂಡರು.
23:56b.LUK.023.056 ಅವರು ಹಿಂತಿರುಗಿದವರಾಗಿ ಪರಿಮಳ ದ್ಯವ್ಯವನ್ನು ಸುಗಂಧ ತೈಲವನ್ನೂ ಸಿದ್ಧಪಡಿಸಿಕೊಂಡು ಆಜ್ಞಾನು ಸಾರವಾಗಿ ಸಬ್ಬತ್ತಿನ ದಿನದಲ್ಲಿ ವಿಶ್ರಮಿಸಿಕೊಂಡರು.
24
24:1b.LUK.024.001 ವಾರದ ಮೊದಲನೆಯ ದಿನದ ಬೆಳಗಿನ ಜಾವದಲ್ಲಿ ಅವರು ಸಿದ್ಧಪಡಿಸಿದ್ದ ಪರಿಮಳ ದ್ರವ್ಯಗಳನ್ನು ತಕ್ಕೊಂಡು ಬಂದರು. ಬೇರೆ ಕೆಲವರು ಅವರೊಂದಿಗಿದ್ದರು.
24:2b.LUK.024.002 ಆಗ ಸಮಾಧಿಯಿಂದ ಕಲ್ಲು ಉರುಳಿಸಲ್ಪಟ್ಟದ್ದನ್ನು ಅವರು ಕಂಡರು.
24:3b.LUK.024.003 ಅವರು ಒಳಗೆ ಪ್ರವೇಶಿಸಿದಾಗ ಅಲ್ಲಿ ಕರ್ತನಾದ ಯೇಸುವಿನ ದೇಹ ವನ್ನು ಕಾಣಲಿಲ್ಲ.
24:4b.LUK.024.004 ಅವರು ಇದಕ್ಕಾಗಿ ಬಹಳವಾಗಿ ಕಳವಳಗೊಂಡರು; ಆಗ ಇಗೋ, ಹೊಳೆಯುವ ವಸ್ತ್ರಗಳನ್ನು ಧರಿಸಿದ್ದ ಇಬ್ಬರು ಪುರುಷರು ಅವರ ಬಳಿಯಲ್ಲಿ ನಿಂತಿದ್ದರು.
24:5b.LUK.024.005 ಆ ಸ್ತ್ರೀಯರು ಭಯದಿಂದ ತಮ್ಮ ಮುಖಗಳನ್ನು ನೆಲದ ಕಡೆಗೆ ಬೊಗ್ಗಿಸಿದಾಗ ಆ ಪುರುಷರು ಅವರಿಗೆ--ಜೀವಿಸುವಾತನನ್ನು ಸತ್ತವ ರೊಳಗೆ ನೀವು ಯಾಕೆ ಹುಡುಕುತ್ತೀರಿ?
24:6b.LUK.024.006 ಆತನು ಇಲ್ಲಿಲ್ಲ, ಎದ್ದಿದ್ದಾನೆ; ಆತನು ಇನ್ನೂ ಗಲಿಲಾಯ ದಲ್ಲಿದ್ದಾಗಲೇ--
24:7b.LUK.024.007 ಮನುಷ್ಯಕುಮಾರನು ಪಾಪಿಷ್ಠರ ಕೈಗಳಿಗೆ ಹೇಗೆ ಒಪ್ಪಿಸಲ್ಪಟ್ಟವನಾಗಿ ಶಿಲುಬೆಗೆ ಹಾಕಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಏಳುವನು ಎಂದು ನಿಮಗೆ ಹೇಳಿದ್ದನ್ನು ನೀವು ನೆನಪು ಮಾಡಿಕೊಳ್ಳಿರಿ ಅಂದರು.
24:8b.LUK.024.008 ಆಗ ಅವರು ಆತನ ಮಾತುಗಳನ್ನು ನೆನಪು ಮಾಡಿಕೊಂಡು
24:9b.LUK.024.009 ಸಮಾಧಿಯಿಂದ ಹಿಂತಿರುಗಿ ಹೋಗಿ ಆ ಹನ್ನೊಂದು ಮಂದಿಗೂ ಉಳಿದವರೆಲ್ಲ ರಿಗೂ ಈ ಎಲ್ಲಾ ವಿಷಯಗಳನ್ನು ತಿಳಿಸಿದರು.
24:10b.LUK.024.010 ಅಪೊ ಸ್ತಲರಿಗೆ ಈ ವಿಷಯಗಳನ್ನು ಹೇಳಿದವರು ಯಾರಂದರೆ ಮಗ್ದಲದುರಿಯಳು, ಯೋಹಾನಳು, ಯಾಕೋಬನ ತಾಯಿಯಾದ ಮರಿಯಳು ಮತ್ತು ಅವರೊಂದಿಗಿದ್ದ ಬೇರೆ ಸ್ತ್ರೀಯರು.
24:11b.LUK.024.011 ಅವರ ಮಾತುಗಳು ಇವರಿಗೆ ಹರಟೆಯ ಕಥೆಗಳಂತೆ ಕಂಡವು, ಅವರು ಅವುಗಳನ್ನು ನಂಬಲಿಲ್ಲ.
24:12b.LUK.024.012 ಆಗ ಪೇತ್ರನು ಎದ್ದು ಸಮಾಧಿಗೆ ಓಡಿಹೋಗಿ ಕೆಳಗೆ ಬೊಗ್ಗಿ ನಾರುಬಟ್ಟೆಗಳು ಮಾತ್ರ ಬಿದ್ದಿರುವದನ್ನು ನೋಡಿ ನಡೆದ ವಿಷಯಕ್ಕಾಗಿ ತನ್ನೊಳಗೆ ಆಶ್ಚರ್ಯಪಡುತ್ತಾ ಹೊರಟುಹೋದನು.
24:13b.LUK.024.013 ಆಗ ಇಗೋ, ಅದೇ ದಿನ ಅವರಲ್ಲಿ ಇಬ್ಬರು ಯೆರೂಸಲೇಮಿನಿಂದ ಸುಮಾರು ಏಳುವರೆ ಮೈಲು ದೂರದಲ್ಲಿದ್ದ ಎಮ್ಮಾಹು ಎಂದು ಕರೆಯಲ್ಪಟ್ಟ ಹಳ್ಳಿಗೆ ಹೋಗುತ್ತಿದ್ದರು.
24:14b.LUK.024.014 ಅವರು ನಡೆದ ಈ ಎಲ್ಲಾ ವಿಷಯಗಳ ಕುರಿತಾಗಿ ಒಬ್ಬರಿಗೊಬ್ಬರು ಮಾತನಾಡಿ ಕೊಳ್ಳುತ್ತಿದ್ದರು.
24:15b.LUK.024.015 ಇದಾದ ಮೇಲೆ ಅವರು ಜೊತೆ ಯಾಗಿ ಮಾತನಾಡುತ್ತಾ ತರ್ಕಿಸುತ್ತಾ ಇರಲು ಯೇಸು ತಾನೇ ಅವರನ್ನು ಸವಿಾಪಿಸಿ ಅವರೊಂದಿಗೆ ಹೋದನು.
24:16b.LUK.024.016 ಆದರೆ ಅವರ ಕಣ್ಣುಗಳು ಮುಚ್ಚಿದ್ದರಿಂದ ಅವರು ಆತನ ಗುರುತನ್ನು ತಿಳಿಯಲಿಲ್ಲ.
24:17b.LUK.024.017 ಆಗ ಆತನು ಅವರಿಗೆ--ನೀವು ಮಾರ್ಗದಲ್ಲಿ ನಡೆಯುತ್ತಾ ವ್ಯಸನವುಳ್ಳವರಾಗಿ ಒಬ್ಬರಿಗೊಬ್ಬರು ಮಾತನಾಡಿ ಕೊಳ್ಳುತ್ತಿರುವ ಈ ವಿಷಯಗಳು ಯಾವ ತರದವುಗಳು ಎಂದು ಕೇಳಿದನು.
24:18b.LUK.024.018 ಆಗ ಅವರಲ್ಲಿ ಕ್ಲಿಯೊಫಾಸ್ ಎಂಬ ಹೆಸರಿದ್ದವನು ಪ್ರತ್ಯುತ್ತರವಾಗಿ ಆತನಿಗೆ--ಈ ದಿವಸಗಳಲ್ಲಿ ಯೆರೂಸಲೇಮಿನೊಳಗೆ ನಡೆದಿರುವ ಸಂಗತಿಗಳನ್ನು ತಿಳಿಯದ ಪರಸ್ಥಳದವನು ನೀನೊಬ್ಬನು ಮಾತ್ರವೋ ಎಂದು ಕೇಳಿದನು.
24:19b.LUK.024.019 ಅದಕ್ಕೆ ಆತನು ಅವರಿಗೆ--ಯಾವ ವಿಷಯಗಳು ಎಂದು ಕೇಳಲು ಅವರು ಆತನಿಗೆ--ದೇವರ ಸನ್ನಿಧಿಯಲ್ಲಿಯೂ ಎಲ್ಲಾ ಜನರ ಮುಂದೆಯೂ ಪ್ರವಾದಿಯಾಗಿದ್ದು ಕೃತ್ಯಗಳ ಲ್ಲಿಯೂ ಮಾತುಗಳಲ್ಲಿಯೂ ಸಮರ್ಥನಾಗಿದ್ದ ನಜ ರೇತಿನ ಯೇಸುವಿನ ವಿಷಯಗಳೇ;
24:20b.LUK.024.020 ಪ್ರಧಾನ ಯಾಜಕರೂ ನಮ್ಮ ಅಧಿಕಾರಿಗಳೂ ಆತನನ್ನು ಮರಣ ದಂಡನೆಗೆ ಒಪ್ಪಿಸಿಕೊಟ್ಟು ಶಿಲುಬೆಗೆ ಹಾಕಿದರು.
24:21b.LUK.024.021 ಆದರೆ ಇಸ್ರಾಯೇಲ್ಯರನ್ನು ವಿಮೋಚಿಸುವಾತನು ಆತನೇ ಎಂದು ನಾವು ನಂಬಿದ್ದೆವು; ಇದಲ್ಲದೆ ಈ ವಿಷಯಗಳು ನಡೆದು ಇದು ಮೂರನೆಯ ದಿನವಾಗಿದೆ;
24:22b.LUK.024.022 ಹೌದು, ನಮ್ಮವರಲ್ಲಿ ಕೆಲವು ಸ್ತ್ರೀಯರು ಬೆಳಗಿನ ಜಾವದಲ್ಲಿ ಸಮಾಧಿಯ ಬಳಿಯಲ್ಲಿದ್ದು
24:23b.LUK.024.023 ಆತನ ದೇಹವನ್ನು ಕಾಣದೆ ಬಂದು ಆತನು ಜೀವದಿಂದೆ ದ್ದಿದ್ದಾನೆ ಎಂದು ದೇವದೂತರು ಹೇಳಿದ್ದನ್ನೂ ಆ ದೂತರ ದೃಶ್ಯವನ್ನು ಕಂಡದ್ದನ್ನೂ ನಮಗೆ ಹೇಳಿ ಆಶ್ಚರ್ಯವನ್ನುಂಟು ಮಾಡಿದರು.
24:24b.LUK.024.024 ಇದಲ್ಲದೆ ನಮ್ಮೊಂದಿಗಿದ್ದ ಕೆಲವರು ಸಮಾಧಿಗೆ ಹೋಗಿ ಆ ಸ್ತ್ರೀಯರು ಹೇಳಿದಂತೆಯೇ ಕಂಡರು; ಆದರೆ ಅವರು ಆತನನ್ನು ನೋಡಲಿಲ್ಲ ಅಂದರು.
24:25b.LUK.024.025 ಆಗ ಆತನು ಅವರಿಗೆ--ಓ ಬುದ್ದಿಹೀನರೇ, ಪ್ರವಾದಿಗಳು ಹೇಳಿ ದ್ದೆಲ್ಲವನ್ನು ನಂಬುವದರಲ್ಲಿ ಮಂದ ಹೃದಯದವರೇ,
24:26b.LUK.024.026 ಕ್ರಿಸ್ತನು ಇವೆಲ್ಲಾ ಶ್ರಮೆಗಳನ್ನು ಅನುಭವಿಸಿ ತನ ಮಹಿಮೆಯಲ್ಲಿ ಪ್ರವೇಶಿಸುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ
24:27b.LUK.024.027 ಮೋಶೆಯ ಮತ್ತು ಎಲ್ಲಾ ಪ್ರವಾದಿ ಗಳಿಂದ ಆರಂಭಿಸಿ ಸಮಸ್ತ ಬರಹಗಳಲ್ಲಿ ತನ್ನ ವಿಷಯವಾದವುಗಳನ್ನು ಅವರಿಗೆ ವಿವರಿಸಿದನು.
24:28b.LUK.024.028 ಅವರು ಹೋಗಬೇಕಾಗಿದ್ದ ಹಳ್ಳಿಯನ್ನು ಸವಿಾಪಿಸು ತ್ತಿರುವಾಗ ಆತನು ಮುಂದೆ ಹೋಗುವವನಂತೆ ತೋರಿಸಿಕೊಂಡನು.
24:29b.LUK.024.029 ಆದರೆ ಅವರು ಆತನಿಗೆ--ನಮ್ಮೊಂದಿಗೆ ಇರು; ಯಾಕಂದರೆ ಈಗ ಸಾಯಂಕಾಲ ವಾಗುತ್ತಾ ಇದೆ ಮತ್ತು ಹಗಲು ಬಹಳ ಮಟ್ಟಿಗೆ ಕಳೆಯಿತು ಎಂದು ಹೇಳಿ ಆತನನ್ನು ಬಲವಂತ ಮಾಡಿ ದರು. ಆಗ ಆತನು ಅವರೊಂದಿಗೆ ಇರುವದಕ್ಕಾಗಿ ಹೋದನು.
24:30b.LUK.024.030 ಇದಾದ ಮೇಲೆ ಆತನು ಅವರೊಂದಿಗೆ ಊಟಕ್ಕೆ ಕೂತುಕೊಂಡಿರಲು ರೊಟ್ಟಿಯನ್ನು ತೆಗೆದು ಕೊಂಡು ಆಶೀರ್ವದಿಸಿ ಮುರಿದು ಅವರಿಗೆ ಕೊಟ್ಟನು.
24:31b.LUK.024.031 ಆಗ ಅವರ ಕಣ್ಣುಗಳು ತೆರೆಯಲ್ಪಟ್ಟದ್ದರಿಂದ ಅವರು ಆತನ ಗುರುತು ಹಿಡಿದರು; ಆತನು ಅವರ ದೃಷ್ಟಿಗೆ ಅದೃಶ್ಯನಾದನು.
24:32b.LUK.024.032 ಆಗ ಅವರು ಒಬ್ಬರಿಗೊಬ್ಬರು--ಆತನು ದಾರಿಯಲ್ಲಿ ನಮ್ಮ ಕೂಡ ಮಾತನಾಡುತ್ತಾ ಬರಹಗಳನ್ನು ನಮಗೆ ವಿವರಿಸಿದಾಗ ನಮ್ಮ ಹೃದಯವು ನಮ್ಮೊಳಗೆ ಕುದಿಯಿತಲ್ಲವೇ ಎಂದು ಅಂದುಕೊಂಡರು.
24:33b.LUK.024.033 ಅವರು ಅದೇ ಗಳಿಗೆಯಲ್ಲಿ ಯೆರೂಸಲೇಮಿಗೆ ಹಿಂದಿರುಗಿಹೋದರು. ಅಲ್ಲಿ ಹನ್ನೊಂದು ಮಂದಿ ಶಿಷ್ಯರೂ ಅವರೊಂದಿಗಿದ್ದವರೂ ಒಟ್ಟಾಗಿ ಕೂಡಿ ಕೊಂಡಿರುವದನ್ನು ಅವರು ಕಂಡರು.
24:34b.LUK.024.034 ಅವರು--ಕರ್ತನು ನಿಜವಾಗಿಯೂ ಎದ್ದಿದ್ದಾನೆ ಮತ್ತು ಆತನು ಸೀಮೋನನಿಗೆ ಕಾಣಿಸಿಕೊಂಡಿದ್ದಾನೆ ಎಂದು ಹೇಳಿ ದರು.
24:35b.LUK.024.035 ಆಗ ಅವರು ದಾರಿಯಲ್ಲಿ ನಡೆದವುಗಳನ್ನೂ ರೊಟ್ಟಿ ಮುರಿಯುವದರಲ್ಲಿ ಅವರು ಹೇಗೆ ಆತನ ಗುರುತು ಹಿಡಿದರೆಂದೂ ಹೇಳಿದರು.
24:36b.LUK.024.036 ಅವರು ಹೀಗೆ ಮಾತನಾಡುತ್ತಿರುವಾಗ ಯೇಸು ತಾನೇ ಅವರ ಮಧ್ಯದಲ್ಲಿ ನಿಂತು ಅವರಿಗೆ--ನಿಮಗೆ ಸಮಾಧಾನವಾಗಲಿ ಅಂದನು.
24:37b.LUK.024.037 ಆದರೆ ಅವರು ದಿಗಿಲುಬಿದ್ದು ಭಯಹಿಡಿದವರಾಗಿ ತಾವು ಕಂಡದ್ದು ಭೂತವೆಂದು ಭಾವಿಸಿದರು.
24:38b.LUK.024.038 ಆದರೆ ಆತನು ಅವರಿಗೆ--ಯಾಕೆ ನೀವು ಕಳವಳಗೊಳ್ಳುತ್ತೀರಿ? ನಿಮ್ಮ ಹೃದಯಗಳಲ್ಲಿ ಆಲೋಚನೆಗಳು ಹುಟ್ಟುವದು ಯಾಕೆ?
24:39b.LUK.024.039 ನನ್ನ ಕೈಗಳನ್ನು ಮತ್ತು ನನ್ನ ಕಾಲುಗಳನ್ನು ನೋಡಿರಿ; ನಾನೇ ಅಲ್ಲವೇ; ನನ್ನನ್ನು ಮುಟ್ಟಿ ನೋಡಿರಿ, ಯಾಕಂದರೆ ನೀವು ನೋಡುವಂತೆ ನನಗಿರುವ ಮಾಂಸ ಮತ್ತು ಎಲುಬುಗಳು ಭೂತಕ್ಕೆ ಇಲ್ಲ ಅಂದನು.
24:40b.LUK.024.040 ಹೀಗೆ ಆತನು ಮಾತನಾಡಿದಾಗ ತನ್ನ ಕೈಗಳನ್ನು ಮತ್ತು ತನ್ನ ಕಾಲುಗಳನ್ನು ಅವರಿಗೆ ತೋರಿಸಿದನು.
24:41b.LUK.024.041 ಆದರೆ ಅವರು ಸಂತೋಷದ ನಿಮಿತ್ತವಾಗಿ ಇನ್ನೂ ನಂಬದೆ ಆಶ್ಚರ್ಯಪಡುತ್ತಿರು ವಾಗ ಆತನು ಅವರಿಗೆ--ನಿಮ್ಮಲ್ಲಿ ಆಹಾರವೇನಾದರೂ ಇದೆಯೋ ಎಂದು ಕೇಳಿದನು.
24:42b.LUK.024.042 ಅವರು ಆತನಿಗೆ ಒಂದು ತುಂಡು ಸುಟ್ಟವಿಾನನ್ನು ಮತ್ತು ಒಂದು ಜೇನು ಹುಟ್ಟನ್ನು ಕೊಟ್ಟರು.
24:43b.LUK.024.043 ಆತನು ತಕ್ಕೊಂಡು ಅವರ ಮುಂದೆ ತಿಂದನು.
24:44b.LUK.024.044 ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.
24:45b.LUK.024.045 ತರುವಾಯ ಅವರು ಬರಹ ಗಳನ್ನು ಅರ್ಥ ಮಾಡಿಕೊಳ್ಳುವಂತೆ ಆತನು ಅವರ ಬುದ್ಧಿಯನ್ನು ತೆರೆದನು.
24:46b.LUK.024.046 ಅವರಿಗೆ--ಕ್ರಿಸ್ತನು ಹೀಗೆ ಶ್ರಮೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವದು ಅಗತ್ಯವಾಗಿತ್ತೆಂತಲೂ
24:47b.LUK.024.047 ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.
24:48b.LUK.024.048 ಇವುಗಳ ವಿಷಯವಾಗಿ ನೀವು ಸಾಕ್ಷಿಗಳಾ ಗಿದ್ದೀರಿ.
24:49b.LUK.024.049 ಇಗೋ, ನನ್ನ ತಂದೆಯು ವಾಗ್ದಾನ ಮಾಡಿದ್ದನ್ನು ನಿಮ್ಮ ಮೇಲೆ ಕಳುಹಿಸುವೆನು; ಆದರೆ ನೀವು ಮೇಲಣ ಶಕ್ತಿಯನ್ನು ಹೊಂದುವ ವರೆಗೆ ಯೆರೂಸಲೇಮ್ ಪಟ್ಟಣದಲ್ಲಿಯೇ ಕಾದುಕೊಂಡಿರ್ರಿ ಅಂದನು.
24:50b.LUK.024.050 ಆತನು ಅವರನ್ನು ಬೇಥಾನ್ಯದವರೆಗೆ ನಡಿಸಿ ಕೊಂಡು ಹೋಗಿ ತನ್ನ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿದನು.
24:51b.LUK.024.051 ಇದಾದ ಮೇಲೆ ಆತನು ಅವರನ್ನು ಆಶೀರ್ವದಿಸುತ್ತಿರುವಾಗ ಆತನು ಅವರಿಂದ ಪ್ರತ್ಯೇಕಿಸಲ್ಪಟ್ಟು ಮೇಲಕ್ಕೆ ಪರಲೋಕದೊಳಗೆ ಒಯ್ಯ ಲ್ಪಟ್ಟನು.
24:52b.LUK.024.052 ಆಗ ಅವರು ಆತನನ್ನು ಆರಾಧಿಸಿ ಬಹು ಸಂತೋಷದಿಂದ ಯೆರೂಸಲೇಮಿಗೆ ಹಿಂತಿರುಗಿದರು.ಅವರು ಯಾವಾಗಲೂ ದೇವಾಲಯದಲ್ಲಿ ದೇವ ರನ್ನು ಸ್ತುತಿಸುತ್ತಾ ಕೊಂಡಾಡುತ್ತಾ ಇದ್ದರು. ಆಮೆನ್.
24:53b.LUK.024.053 ಅವರು ಯಾವಾಗಲೂ ದೇವಾಲಯದಲ್ಲಿ ದೇವ ರನ್ನು ಸ್ತುತಿಸುತ್ತಾ ಕೊಂಡಾಡುತ್ತಾ ಇದ್ದರು. ಆಮೆನ್.
- Holder of rights
- Multilingual Bible Corpus
- Citation Suggestion for this Object
- TextGrid Repository (2025). Kannada Collection. Luke (Kannada). Luke (Kannada). Multilingual Parallel Bible Corpus. Multilingual Bible Corpus. https://hdl.handle.net/21.11113/0000-0016-A1EC-8