1 Corinthians (Kannada)

1 Corinthians (Kannada)

1

1:1b.1CO.001.001 ದೇವರ ಚಿತ್ತಾನುಸಾರವಾಗಿ ಯೇಸು ಕ್ರಿಸ್ತನ ಅಪೊಸ್ತಲನಾಗುವದಕ್ಕೆ ಕರೆಯ ಲ್ಪಟ್ಟ ಪೌಲನೂ ನಮ್ಮ ಸಹೋದರನಾದ ಸೊಸ್ಥೆ ನನೂ

1:2b.1CO.001.002 ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತ ಯೇಸುವಿನಲ್ಲಿ ಪ್ರತಿಷ್ಠಿತರೂ ಪರಿಶುದ್ಧರಾಗು ವದಕ್ಕೆ ಕರೆಯಲ್ಪಟ್ಟವರೂ ಆಗಿರುವವರಿಗೆ ಮತ್ತು ಅವರಿಗೂ ನಮಗೂ ಪ್ರತಿಯೊಂದು ಸ್ಥಳದಲ್ಲಿ ನಮ್ಮ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರೆಲ್ಲರಿಗೂ

1:3b.1CO.001.003 ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಆಗಲಿ.

1:4b.1CO.001.004 ಯೇಸು ಕ್ರಿಸ್ತನಿಂದ ದೇವರು ನಿಮಗೆ ಅನುಗ್ರಹಿ ಸಿದ ಕೃಪೆಯ ನಿಮಿತ್ತ ನಾನು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರನ್ನು ಕೊಂಡಾಡುತ್ತೇನೆ.

1:5b.1CO.001.005 ಹೀಗೆ ನೀವು ಎಲ್ಲಾ ನುಡಿಯಲ್ಲಿಯೂ ಸಕಲ ಜ್ಞಾನದಲ್ಲಿಯೂ ಪ್ರತಿಯೊಂದು ವಿಷಯದಲ್ಲಿ ಆತನಿಂದ ಸಮೃದ್ಧಿ ಹೊಂದಿದವರಾಗಿದ್ದೀರಿ.

1:6b.1CO.001.006 ಕ್ರಿಸ್ತನ ವಿಷಯವಾದ ಸಾಕ್ಷಿಯು ನಿಮ್ಮಲ್ಲಿ ದೃಢವಾಗಿ ನೆಲೆಗೊಂಡಿತ್ತು.

1:7b.1CO.001.007 ಹೀಗಿ ರಲಾಗಿ ನೀವು ಯಾವದರಲ್ಲಿಯೂ ಕೊರತೆಯಿಲ್ಲದವರಾಗಿದ್ದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣಕ್ಕಾಗಿ ಎದುರು ನೋಡುವವರಾಗಿದ್ದೀರಿ.

1:8b.1CO.001.008 ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ಯಾರೂ ನಿಮ್ಮ ಮೇಲೆ ತಪ್ಪುಹೊರಿಸದಂತೆ ಆತನು ನಿಮ್ಮನ್ನು ಕಡೇವರೆಗೂ ದೃಢಪಡಿಸುವನು.

1:9b.1CO.001.009 ದೇವರು ನಂಬಿ ಗಸ್ತನು; ನಮ್ಮ ಕರ್ತನಾದ ಯೇಸು ಕ್ರಿಸ್ತನೆಂಬ ತನ್ನ ಮಗನ ಅನ್ಯೋನ್ಯತೆಗೆ ನಿಮ್ಮನ್ನು ಕರೆದವನು ಆತನೇ.

1:10b.1CO.001.010 ಸಹೋದರರೇ, ನಿಮ್ಮೆಲ್ಲರ ಮಾತು ಒಂದೇ ಆಗಿರಬೇಕು; ನಿಮ್ಮಲ್ಲಿ ಭೇದಗಳಿರಬಾರದು, ನೀವು ಒಂದೇ ಮನಸ್ಸೂ ಒಂದೇ ಅಭಿಪ್ರಾಯವೂ ಉಳ್ಳವ ರಾಗಿದ್ದು ಹೊಂದಿಕೆಯಿಂದಿರಬೇಕು ಎಂಬದಾಗಿ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ.

1:11b.1CO.001.011 ನನ್ನ ಸಹೋದರರೇ, ನಿಮ್ಮಲ್ಲಿ ಜಗಳಗಳುಂಟೆಂದು ನಿಮ್ಮ ವಿಷಯವಾಗಿ ಖ್ಲೋಯೆಯ ಮನೆಯವರಿಂದ ನನಗೆ ತಿಳಿದುಬಂತು.

1:12b.1CO.001.012 ನಾನು ನಿಮಗೆ ಈಗ ಹೇಳುವದೇನಂದರೆ, ನಿಮ್ಮೊ ಳಗೆ ಪ್ರತಿಯೊಬ್ಬನು--ನಾನು ಪೌಲನವನು, ನಾನು ಅಪೊಲ್ಲೋಸನವನು, ನಾನು ಕೇಫನವನು, ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ.

1:13b.1CO.001.013 ಕ್ರಿಸ್ತನು ವಿಭಾಗವಾಗಿದ್ದಾನೋ? ನಿಮಗೋಸ್ಕರ ಶಿಲುಬೆಗೆ ಹಾಕಿಸಿಕೊಂಡವನು ಪೌಲನೋ? ನೀವು ಪೌಲನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡಿರೋ?

1:14b.1CO.001.014 ನಿಮ್ಮಲ್ಲಿ ಕ್ರಿಸ್ಪನಿಗೂ ಗಾಯನಿಗೂ ಹೊರತಾಗಿ ಮತ್ತಾರಿಗೂ ನಾನು ಬಾಪ್ತಿಸ್ಮ ಮಾಡಿಸಲಿಲ್ಲವಾದದರಿಂದ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ.

1:15b.1CO.001.015 ಹೀಗೆ ನನ್ನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡಿರೆಂದು ಯಾರಿಗೂ ಹೇಳುವದ ಕ್ಕಾಗದು.

1:16b.1CO.001.016 ನಾನು ಸ್ತೆಫನನ ಮನೆಯವರಿಗೆ ಸಹ ಬಾಪ್ತಿಸ್ಮ ಮಾಡಿಸಿದೆನು. ಇವರಿಗಲ್ಲದೆ ಇನ್ನಾರಿಗೂ ನಾನು ಬಾಪ್ತಿಸ್ಮ ಮಾಡಿಸಿದಂತೆ ಕಾಣೆನು.

1:17b.1CO.001.017 ಬಾಪ್ತಿಸ್ಮ ಮಾಡಿಸುವದಕ್ಕಲ್ಲ, ಸುವಾರ್ತೆಯನ್ನು ಸಾರುವದಕ್ಕೆ ಕ್ರಿಸ್ತನು ನನ್ನನ್ನು ಕಳುಹಿಸಿದನು. ವಾಕ್ಚಾತುರ್ಯದಿಂದ ಸಾರಬೇಕೆಂದು ಕಳುಹಿಸಲಿಲ್ಲ; ಹಾಗೆ ಸಾರಿದರೆ ಕ್ರಿಸ್ತನ ಶಿಲುಬೆಯು ನಿರರ್ಥಕವಾಗುವದು.

1:18b.1CO.001.018 ನಾಶವಾಗುವವರಿಗೆ ಶಿಲುಬೆಯ ವಿಷಯವಾದ ಸಾರೋಣವು ಹುಚ್ಚುತನವಾಗಿದೆ; ರಕ್ಷಣೆ ಹೊಂದಿದ ನಮಗಾದರೋ ಅದು ದೇವರ ಶಕ್ತಿಯಾಗಿದೆ.

1:19b.1CO.001.019 ನಾನು ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು; ವಿವೇಕಿಗಳ ವಿವೇಕವನ್ನು ಇಲ್ಲದಂತಾಗ ಮಾಡುವೆನು ಎಂದು ಬರೆಯಲ್ಪಟ್ಟಿದೆ.

1:20b.1CO.001.020 ಜ್ಞಾನಿಯು ಎಲ್ಲಿ? ಶಾಸ್ತ್ರಿಯು ಎಲ್ಲಿ? ಲೋಕದ ತರ್ಕವಾದಿ ಎಲ್ಲಿ? ದೇವರು ಈ ಲೋಕದ ಜ್ಞಾನವನ್ನು ಹುಚ್ಚುತನವನ್ನಾಗಿ ಮಾಡಿದ್ದಾನಲ್ಲವೇ?

1:21b.1CO.001.021 ಯಾಕಂದರೆ ದೇವರ ಜ್ಞಾನದಲ್ಲಿ ಲೋಕವು(ತನ್ನ) ಜ್ಞಾನದ ಮೂಲಕ ದೇವರನ್ನು ತಿಳಿದುಕೊಳ್ಳಲಿಲ್ಲವಾದ ದರಿಂದ ಪ್ರಸಂಗದ ಹುಚ್ಚುತನದಿಂದಲೇ ನಂಬುವ ವರನ್ನು ರಕ್ಷಿಸುವದು ದೇವರಿಗೆ ಇಷ್ಟವಾಗಿತ್ತು.

1:22b.1CO.001.022 ಯೆಹೂದ್ಯರು ಸೂಚಕಕಾರ್ಯವನ್ನು ಕೇಳುತ್ತಾರೆ; ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ;

1:23b.1CO.001.023 ನಾವಾದರೋ ಶಿಲುಬೆಗೆ ಹಾಕಲ್ಪಟ್ಟವನಾದ ಕ್ರಿಸ್ತನನ್ನು ಪ್ರಚುರ ಪಡಿಸುತ್ತೇವೆ. ಆತನು ಯೆಹೂದ್ಯರಿಗೆ ಅಭ್ಯಂತರವೂ ಗ್ರೀಕರಿಗೆ ಹುಚ್ಚುತನವೂ ಆಗಿದ್ದಾನೆ.

1:24b.1CO.001.024 ಆದರೆ ಕರೆಯಲ್ಪಟ್ಟ ಯೆಹೂದ್ಯರಿಗೂ ಗ್ರೀಕರಿಗೂ ಕ್ರಿಸ್ತನೇ ದೇವರ ಶಕ್ತಿಯೂ ದೇವರ ಜ್ಞಾನವೂ ಆಗಿದ್ದಾನೆ.

1:25b.1CO.001.025 ದೇವರ ಹುಚ್ಚುತನವು ಮನುಷ್ಯರಿಗಿಂತಲೂ ಜ್ಞಾನವುಳ್ಳದ್ದಾಗಿದೆ. ದೇವರ ಬಲಹೀನತೆಯು ಮನುಷ್ಯರಿಗಿಂತಲೂ ಬಲವುಳ್ಳದ್ದಾಗಿದೆ.

1:26b.1CO.001.026 ಸಹೋದರರೇ, ದೇವರು ನಿಮ್ಮನ್ನು ಕರೆದಾಗ ಎಂಥವರನ್ನು ಕರೆದನೆಂದು ಆಲೋಚಿಸಿರಿ; ನಿಮ್ಮೊಳಗೆ ಲೌಕಿಕದೃಷ್ಟಿಯಲ್ಲಿ ಜ್ಞಾನಿಗಳೂ ಅನೇಕರಿಲ್ಲ, ಬಲಿಷ್ಠರೂ ಅನೇಕರಿಲ್ಲ, ಕುಲೀನರೂ ಅನೇಕರಿಲ್ಲ.

1:27b.1CO.001.027 ಆದರೆ ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾನೆ; ದೇವರು ಬಲಿಷ್ಟರನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾನೆ;

1:28b.1CO.001.028 ಇದಲ್ಲದೆ ದೇವರು ಇರುವವುಗಳನ್ನು ಇಲ್ಲದಂತಾಗಿ ಮಾಡುವ ಹಾಗೆ ಈ ಲೋಕದ ಹೀನವಾದವರನ್ನೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣನೆಗೆ ಬಾರದವರನ್ನೂ ಆರಿಸಿಕೊಂಡಿದ್ದಾನೆ.

1:29b.1CO.001.029 ಹೀಗಿರಲು ಆತನ ಮುಂದೆ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದವಿಲ್ಲ.

1:30b.1CO.001.030 ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.

1:31b.1CO.001.031 ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.

2

2:1b.1CO.002.001 ಸಹೋದರರೇ, ನಾನಂತೂ ದೇವರ ಸಾಕ್ಷಿಯನ್ನು ತಿಳಿಸುವವನಾಗಿ ನಿಮ್ಮ ಬಳಿಗೆ ಬಂದಾಗ ವಾಕ್ಚಾತುರ್ಯದಿಂದಾಲಿ ಜ್ಞಾನದಿಂದಾಗಲಿ ಬರಲಿಲ್ಲ.

2:2b.1CO.002.002 ಶಿಲುಬೆಗೆ ಹಾಕಲ್ಪಟ್ಟವನಾದ ಯೇಸು ಕ್ರಿಸ್ತನನ್ನೇ ಹೊರತು ಬೇರೆ ಯಾವದನ್ನೂ ತಿಳಿಯ ಕೂಡದೆಂದು ನಾನು ನಿಮ್ಮಲ್ಲಿ ತಿರ್ಮಾನಿಸಿ ಕೊಂಡೆನು.

2:3b.1CO.002.003 ಇದಲ್ಲದೆ ನಾನು ನಿಮ್ಮ ಬಳಿಯಲ್ಲಿದ್ದಾಗ ಬಲಹೀನನೂ ಭಯಪಡುವವನೂ ಬಹುನಡುಗು ವವನೂ ಆಗಿದ್ದೆನು.

2:4b.1CO.002.004 ನನ್ನ ಬೋಧನೆಯಲ್ಲಿಯೂ ಪ್ರಸಂಗದಲ್ಲಿಯೂ ಮನವೊಲಿಸುವ ಮನುಷ್ಯಜ್ಞಾನ ವಾಕ್ಯಗಳನ್ನು ನಾನು ಪ್ರಯೋಗಿಸದೆ ಆತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು.

2:5b.1CO.002.005 ಹೀಗೆ ನಿಮ್ಮ ನಂಬಿಕೆಯು ಮನುಷ್ಯಜ್ಞಾನವನ್ನು ಆಧಾರ ಮಾಡಿಕೊಂಡಿರದೆ ದೇವರ ಶಕ್ತಿಯನ್ನೇ ಆಧಾರ ಮಾಡಿಕೊಂಡಿರಬೇಕು.

2:6b.1CO.002.006 ಆದರೂ ಪರಿಪೂರ್ಣರಾದವರಲ್ಲಿ ಜ್ಞಾನವನ್ನೇ ನಾವು ಹೇಳುತ್ತೇವೆ; ಆದಾಗ್ಯೂ ಅದು ಇಹಲೋಕದ ಜ್ಞಾನವಲ್ಲ ಇಲ್ಲವೆ ಇಲ್ಲದೆ ಹೋಗುವ ಇಹ ಲೋಕಾಧಿಪತಿಗಳ ಜ್ಞಾನವೂ ಅಲ್ಲ.

2:7b.1CO.002.007 ಆದರೆ ಗುಪ್ತ ವಾಗಿದ್ದ ಜ್ಞಾನವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ; ಅದನ್ನು ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿದನು.

2:8b.1CO.002.008 ಇದನ್ನು (ಆ ಜ್ಞಾನವನ್ನು) ಇಹಲೋಕಾಧಿ ಪತಿಗಳಲ್ಲಿ ಯಾರೂ ಅರಿಯಲಿಲ್ಲ; ಅರಿತಿದ್ದರೆ ಅವರು ಮಹಿಮೆ ಯುಳ್ಳ ಕರ್ತನನ್ನು ಶಿಲುಬೆಗೆ ಹಾಕುತ್ತಿರಲಿಲ್ಲ.

2:9b.1CO.002.009 ಆದರೆ ಬರೆದಿರುವ ಪ್ರಕಾರ--ದೇವರು ತನ್ನನ್ನು ಪ್ರೀತಿಸು ವವರಿಗಾಗಿ ಸಿದ್ಧಮಾಡಿರುವಂಥವುಗಳನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಇಲ್ಲವೆ ಅವು ಮನುಷ್ಯನ ಹೃದಯದಲ್ಲಿ ಸೇರಲಿಲ್ಲ.

2:10b.1CO.002.010 ನಮಗಾದರೋ ದೇವರು ತನ್ನ ಆತ್ಮನ ಮೂಲಕ ಅವುಗಳನ್ನು ಪ್ರಕಟಿಸಿದನು. ಆ ಆತ್ಮನು ಎಲ್ಲಾ ವಿಷಯಗಳನ್ನು, ಹೌದು, ದೇವರ ಅಗಾಧವಾದ ವಿಷಯಗಳನ್ನು ಕೂಡ ಪರಿಶೋಧಿಸು ವವನಾಗಿದ್ದಾನೆ.

2:11b.1CO.002.011 ಮನುಷ್ಯನ ಒಳಗಿನ ವಿಷಯಗಳು ಅವನಲ್ಲಿರುವ ಆತ್ಮಕ್ಕೆ ಹೊರತು ಮತ್ತಾರಿಗೆ ತಿಳಿದಾವು? ಹಾಗೆಯೇ ದೇವರ ವಿಷಯಗಳನ್ನು ದೇವರ ಆತ್ಮನೇ ಹೊರತು ಬೇರೆ ಯಾರೂ ಗ್ರಹಿಸುವದಿಲ್ಲ.

2:12b.1CO.002.012 ನಾವು ಪ್ರಾಪಂಚಿಕ ಆತ್ಮವನ್ನು ಹೊಂದದೆ ದೇವರು ನಮಗೆ ಉಚಿತವಾಗಿ ದಯಪಾಲಿಸಿರುವವುಗಳನ್ನು ತಿಳುಕೊಳ್ಳು ವದಕ್ಕಾಗಿ ದೇವರ ಆತ್ಮನನ್ನೇ ಹೊಂದಿದೆವು.

2:13b.1CO.002.013 ಇವುಗಳನ್ನು ಮಾನುಷ್ಯಜ್ಞಾನವು ಕಲಿಸಿದ ಮಾತು ಗಳಿಂದ ಹೇಳದೆ ಪರಿಶುದ್ಧಾತ್ಮನು ಕಲಿಸಿಕೊಟ್ಟ ಮಾತುಗಳಿಂದ ಹೇಳಿ ಆತ್ಮ ಸಂಬಂಧವಾದವುಗಳನ್ನು ಆತ್ಮೀಕವಾದವುಗಳೊಂದಿಗೆ ಹೋಲಿಸುತ್ತೇವೆ.

2:14b.1CO.002.014 ಪ್ರಾಕೃತ ಮನುಷ್ಯನು ದೇವರಾತ್ಮನ ವಿಷಯಗಳನ್ನು ಅಂಗೀಕರಿಸುವದಿಲ್ಲ; ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ; ಇಲ್ಲವೆ ಅವು ಆತ್ಮವಿಚಾರದಿಂದ ತಿಳಿಯತಕ್ಕವುಗಳಾಗಿರಲಾಗಿ ಅವನು ಅವುಗಳನ್ನು ಗ್ರಹಿಸ ಲಾರನು.

2:15b.1CO.002.015 ಆತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನು ವಿಚಾರಿಸಿ ತಿಳುಕೊಳ್ಳುತ್ತಾನೆ; ಆದರೆ ಇವನನ್ನು ಯಾವನೂ ವಿಚಾರಿಸಿ ತಿಳುಕೊಳ್ಳುವದಿಲ್ಲ.ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು? ನಮಗಾದರೋ ಕ್ರಿಸ್ತನ ಮನಸ್ಸು ಇರುತ್ತದೆ.

2:16b.1CO.002.016 ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು? ನಮಗಾದರೋ ಕ್ರಿಸ್ತನ ಮನಸ್ಸು ಇರುತ್ತದೆ.

3

3:1b.1CO.003.001 ಸಹೋದರರೇ, ನಾನಂತೂ ಆತ್ಮನಿಂದ ನಡಿಸಿಕೊಳ್ಳುವವರಿಗೆ ತಕ್ಕಂತೆ ನಿಮ್ಮ ಸಂಗಡ ಮಾತನಾಡಲಾರದೆ ಪ್ರಾಪಂಚಿಕರೂ ಕ್ರಿಸ್ತ ನಲ್ಲಿ ಎಳೆಕೂಸುಗಳೂ ಆಗಿರುವಂಥವರಿಗೆ ತಕ್ಕಂತೆ ನಿಮ್ಮ ಸಂಗಡ ಮಾತನಾಡಬೇಕಾಯಿತು.

3:2b.1CO.003.002 ನಿಮಗೆ ಹಾಲು ಕುಡಿಸಿದೆನು, ಅನ್ನ ಕೊಡಲಿಲ್ಲ; ಅನ್ನ ತಿನು ್ನವದಕ್ಕೆ ನಿಮಗೆ ಶಕ್ತಿ ಇರಲಿಲ್ಲ, ಇಲ್ಲವೆ ಈಗಲಾದರೂ ಶಕ್ತಿಯಿಲ್ಲ;

3:3b.1CO.003.003 ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ನಿಮ್ಮೊಳಗೆ ಹೊಟ್ಟೇಕಿಚ್ಚು, ಜಗಳ, ಭೇದಗಳು ಇರುವಲ್ಲಿ ನೀವು ಪ್ರಾಪಂಚಿಕರಾಗಿದ್ದು ಮನುಷ್ಯರಂತೆ ನಡೆಯುತ್ತೀರಲ್ಲವೇ?

3:4b.1CO.003.004 ಒಬ್ಬನು--ನಾನು ಪೌಲನ ವನೆಂದೂ ಮತ್ತೊಬ್ಬನು--ನಾನು ಅಪೊಲ್ಲೋಸನ ವನೆಂದೂ ಹೇಳುತ್ತಿರುವಾಗ ನೀವು ಪ್ರಾಪಂಚಿಕ ರಲ್ಲವೇ?

3:5b.1CO.003.005 ಹಾಗಾದರೆ ಪೌಲನು ಯಾರು? ಅಪೊಲ್ಲೋಸನು ಯಾರು? ಅವರು ಸೇವಕರು, ಅವರ ಮುಖಾಂತರ ನೀವು ನಂಬುವವರಾದಿರಿ; ಕರ್ತನು ಒಬ್ಬೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆ ಮಾಡುವವ ರಾಗಿದ್ದಾರೆ.

3:6b.1CO.003.006 ನಾನು ಸಸಿಯನ್ನು ನೆಟ್ಟೆನು, ಅಪೊಲ್ಲೋ ಸನು ನೀರು ಹೊಯಿದನು. ಆದರೆ ಬೆಳೆಸುತ್ತಾ ಬಂದಾತನು ದೇವರು.

3:7b.1CO.003.007 ಹೀಗಿರಲಾಗಿ ನೆಡುವವ ನಾಗಲಿ ನೀರು ಹೊಯ್ಯುವವನಾಗಲಿ ವಿಶೇಷವಾ ದವನಲ್ಲ, ಬೆಳೆಸುವ ದೇವರೇ ವಿಶೇಷವಾದವನು.

3:8b.1CO.003.008 ನೆಡುವವನೂ ನೀರು ಹೊಯ್ಯುವವನೂ ಒಂದೇ ಆಗಿದ್ದಾರೆ; ಆದರೂ ಪ್ರತಿಯೊಬ್ಬನಿಗೆ ಅವನವನ ಕಷ್ಟಕ್ಕೆ ತಕ್ಕಹಾಗೆ ಕೂಲಿಯು ದೊರೆಯುವದು.

3:9b.1CO.003.009 ನಾವು ದೇವರ ಜೊತೆ ಕೆಲಸದವರು; ನೀವು ದೇವರ ಹೊಲವೂ ದೇವರ ಕಟ್ಟಡವೂ ಆಗಿದ್ದೀರಿ.

3:10b.1CO.003.010 ದೇವರು ನನಗೆ ಕೃಪೆಯನ್ನು ಕೊಟ್ಟ ಪ್ರಕಾರ ನಾನು ಪ್ರವೀಣಶಿಲ್ಪಿಯಂತೆ ಆಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ; ಪ್ರತಿಯೊಬ್ಬನು ತಾನು ಅದರ ಮೇಲೆ ಹೇಗೆ ಕಟ್ಟುತ್ತಾನೋ ಎಚ್ಚರಿಕೆಯಾಗಿರಬೇಕು.

3:11b.1CO.003.011 ಹಾಕಿರುವ ಅಸ್ತಿವಾರವು ಯೇಸು ಕ್ರಿಸ್ತನೇ; ಆ ಅಸ್ತಿವಾರವನ್ನಲ್ಲದೆ ಮತ್ತೊಂದು ಅಸ್ತಿವಾರವನ್ನು ಯಾರೂ ಹಾಕಲಾರರಷ್ಟೆ.

3:12b.1CO.003.012 ಈ ಅಸ್ತಿವಾರದ ಮೇಲೆ ಚಿನ್ನ ಬೆಳ್ಳಿ ಅಮೂಲ್ಯವಾದ ಕಲ್ಲುಗಳು ಕಟ್ಟಿಗೆ ಹುಲ್ಲು ಆಪು ಇವುಗಳಲಿ

3:13b.1CO.003.013 ಯಾವದರಿಂದ ಕಟ್ಟಿದರೂ ಅವನವನ ಕೆಲಸವು ವ್ಯಕ್ತವಾಗುವದು; ಯಾಕಂದರೆ ಆ ದಿನವು ಬೆಂಕಿ ಯೊಡನೆ ಪ್ರತ್ಯಕ್ಷವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವದು; ಅವನವನ ಕೆಲಸವೆಂಥದೋ ಆ ಬೆಂಕಿ ಶೋಧಿಸುವದು.

3:14b.1CO.003.014 ಒಬ್ಬನು ಆ ಅಸ್ತಿವಾರದ ಮೇಲೆ ಕಟ್ಟಿದ್ದು ಉಳಿದರೆ ಅವನಿಗೆ ಪ್ರತಿಫಲ ದೊರೆಯುವದು;

3:15b.1CO.003.015 ಒಬ್ಬನು ಕಟ್ಟಿದ್ದು ಸುಟ್ಟು ಹೋದರೆ ಅವನಿಗೆ ನಷ್ಟವಾಗುವದು; ತಾನಾದರೋ ರಕ್ಷಣೆ ಹೊಂದುವನು. ಆದರೂ ಬೆಂಕಿಯೊಳಗಿಂದ ತಪ್ಪಿಸಿ ಕೊಂಡವನ ಹಾಗಿರುವನು.

3:16b.1CO.003.016 ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?

3:17b.1CO.003.017 ಯಾವನಾದರೂ ದೇವರ ಆಲಯವನ್ನು ಹೊಲೆಮಾಡಿದರೆ ದೇವರು ಅವನನ್ನು ನಾಶಮಾಡುವನು; ಯಾಕಂದರೆ ದೇವರ ಆಲಯವು ಪವಿತ್ರವಾದದ್ದು, ಆ ಆಲಯವು ನೀವೇ.

3:18b.1CO.003.018 ಯಾವನೂ ತನ್ನನ್ನು ತಾನೇ ಮೋಸಗೊಳಿಸ ದಿರಲಿ; ನಿಮ್ಮಲ್ಲಿ ಯಾವನಾದರೂ ಈ ಲೋಕ ಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿ ಕೊಂಡರೆ ಜ್ಞಾನಿಯಾಗುವಂತೆ ಹುಚ್ಚನಾಗಲಿ.

3:19b.1CO.003.019 ಇಹಲೋಕಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಯಾಕಂದರೆ--ಆತನು ಜ್ಞಾನಿ ಗಳನ್ನು ಅವರ ಸ್ವಂತತಂತ್ರದಲ್ಲಿಯೇ ಹಿಡು ಕೊಳ್ಳುತ್ತಾನೆಂತಲೂ

3:20b.1CO.003.020 ಜ್ಞಾನಿಗಳ ಯೋಚನೆಗಳು ನಿಷ್ಪಲವಾದವುಗಳೆಂದೂ ಕರ್ತನು ತಿಳುಕೊಳ್ಳುತ್ತಾನೆ ಬರೆದದೆಯಲ್ಲಾ;

3:21b.1CO.003.021 ಆದಕಾರಣ ಮನುಷ್ಯ ಮಾತ್ರದವರ ವಿಷಯದಲ್ಲಿ ಯಾರೂ ಹಿಗ್ಗದಿರಲಿ. ಯಾಕಂದರೆ ಸಮಸ್ತವೂ ನಿಮ್ಮದು;

3:22b.1CO.003.022 ಪೌಲನಾಗಲಿ ಅಪೊಲ್ಲೋಸನಾಗಲಿ ಕೇಫನಾಗಲಿ ಲೋಕವಾಗಲಿ ಜೀವವಾಗಲಿ ಮರಣವಾಗಲಿ ಈಗಿನ ಸಂಗತಿ ಗಳಾಗಲಿ ಮುಂದಣ ಸಂಗತಿಗಳಾಗಲೀ ಸಮಸ್ತವೂ ನಿಮ್ಮವೇ;ನೀವಂತೂ ಕ್ರಿಸ್ತನವರು, ಕ್ರಿಸ್ತನು ದೇವರವನು.

3:23b.1CO.003.023 ನೀವಂತೂ ಕ್ರಿಸ್ತನವರು, ಕ್ರಿಸ್ತನು ದೇವರವನು.

4

4:1b.1CO.004.001 ಒಬ್ಬನು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರ ಮರ್ಮಗಳ ವಿಷಯದಲ್ಲಿ ಮನೆವಾರ್ತೆಯವರೆಂತಲೂ ಎಣಿಸಲಿ.

4:2b.1CO.004.002 ಹೀಗಿರಲು ಮನೆವಾರ್ತೆಯವನು ನಂಬಿಗಸ್ತನಾಗಿ ಕಂಡುಬರುವದು ಅವಶ್ಯವಾಗಿದೆ.

4:3b.1CO.004.003 ನನಗಾದರೋ ನಿಮ್ಮಿಂದಾಗಲಿ ಮನುಷ್ಯರ ನ್ಯಾಯವಿಚಾರಣೆಯಿಂದಾಗಲಿ ನನಗೆ ನ್ಯಾಯವಿಚಾರಣೆಯಾಗುವದು ಅತ್ಯಲ್ಪವಾಗಿದೆ. ಹೌದು, ನಾನೂ ನನ್ನನ್ನು ವಿಚಾರಿಸಿಕೊಳ್ಳುವದಿಲ್ಲ.

4:4b.1CO.004.004 ನಾನೇ ನಾನಾಗಿ ಏನೂ ತಿಳಿಯದವನಾಗಿದ್ದೇನೆ; ಆದಾಗ್ಯೂ ಅದರಿಂದ ನಾನು ನೀತಿವಂತನಾಗಲಿಲ್ಲ; ನನ್ನನ್ನು ವಿಚಾರಿಸುವಾತನು ಕರ್ತನೇ.

4:5b.1CO.004.005 ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.

4:6b.1CO.004.006 ಸಹೋದರರೇ, ನಾನು ನಿಮಗೋಸ್ಕರವೇ ಸಾಮ್ಯರೂಪವಾಗಿ ನನ್ನ ವಿಷಯದಲ್ಲಿಯೂ ಅಪೊಲ್ಲೋಸನ ವಿಷಯದಲ್ಲಿಯೂ ಹೇಳಿದ್ದೇನೆ; ಬರೆದಿರುವದನ್ನು ನೀವು ವಿಾರಿಹೋಗದೆ ನಿಮ್ಮಲ್ಲಿ ಯಾರೂ ಒಬ್ಬನಿಗೆ ವಿರೋಧವಾಗಿ ಮತ್ತೊಬ್ಬನು ಉಬ್ಬಿಕೊಳ್ಳಬಾರದೆಂಬದನ್ನು ನಮ್ಮಲ್ಲಿ ಕಲಿತುಕೊಳ್ಳ ಬೇಕು.

4:7b.1CO.004.007 ನಿನಗೂ ಇತರರಿಗೂ ತಾರತಮ್ಯ ಮಾಡಿ ದವರು ಯಾರು? ನೀನು ಹೊಂದದೆ ಇರುವಂಥದ್ದು ನಿನ್ನಲ್ಲಿ ಯಾವದು ಇದೆ? ಹೊಂದಿದ ಮೇಲೆ ಹೊಂದದವನಂತೆ ನೀನು ಯಾಕೆ ಹಿಗ್ಗಿಕೊಳ್ಳುತ್ತೀ?

4:8b.1CO.004.008 ಈಗಾಗಲೇ ನೀವು ತೃಪ್ತರಾದಿರಿ, ಈಗಾಗಲೇ ಐಶ್ವರ್ಯವಂತರಾದಿರಿ, ನಾವಿಲ್ಲದೆ ನೀವು ಅರಸರಂತೆ ಆಳಿದಿರಿ; ನೀವು ಆಳುವಂತೆ ದೇವರು ಮಾಡಿದ್ದರೆ ಎಷ್ಟೋ ಒಳ್ಳೇದಾಗುತ್ತಿತ್ತು; ಆಗ ನಾವು ಸಹ ನಿಮ್ಮೊಂದಿಗೆ ಆಳುತ್ತಿದ್ದೆವು.

4:9b.1CO.004.009 ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣಕ್ಕೆ ನೇಮಿಸಿದನೋ ಎಂಬಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ; ನಾವು ಲೋಕಕ್ಕೂ ದೂತರಿಗೂ ಮನುಷ್ಯರಿಗೂ ನೋಟವಾದೆವು.

4:10b.1CO.004.010 ನಾವಂತೂ ಕ್ರಿಸ್ತನ ನಿಮಿತ್ತ ಹುಚ್ಚರಾಗಿದ್ದೇವೆ. ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ; ನಾವು ಬಲಹೀನರು, ಆದರೆ ನೀವು ಬಲಿಷ್ಠರು; ನೀವು ಗೌರವವುಳ್ಳವರು, ಆದರೆ ನಾವು ಹೀನೈಸಲ್ಪಟ್ಟವರು.

4:11b.1CO.004.011 ಈ ಗಳಿಗೆಯ ವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ವಸ್ತ್ರವಿಲ್ಲದವರೂ ಗುದ್ದುತಿನ್ನುವವರೂ ಮನೆಯಿಲ್ಲ ದವರೂ

4:12b.1CO.004.012 ಈ ಗಳಿಗೆಯ ವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ವಸ್ತ್ರವಿಲ್ಲದವರೂ ಗುದ್ದುತಿನ್ನುವವರೂ ಮನೆಯಿಲ್ಲ ದವರೂ

4:13b.1CO.004.013 ಅಪಕೀರ್ತಿ ಹೊಂದಿ ಬೇಡಿಕೊಳ್ಳುತ್ತೇವೆ. ನಾವು ಈಗಿನವರೆಗೂ ಲೋಕದ ಕಸವೋ ಎಲ್ಲಾದರ ಹೊಲಸೋ ಎಂಬಂತೆ ಮಾಡಲ್ಪಟ್ಟಿದ್ದೇವೆ.

4:14b.1CO.004.014 ನಿಮ್ಮನ್ನು ನಾಚಿಕೆಪಡಿಸುವದಕ್ಕಾಗಿ ಬರೆಯದೆ ನನ್ನ ಪ್ರಿಯ ಮಕ್ಕಳೆಂದು ಭಾವಿಸಿ ನಿಮ್ಮನ್ನು ಎಚ್ಚರಿಸುವ ದಕ್ಕಾಗಿಯೇ ಈ ಮಾತುಗಳನ್ನು ಬರೆದಿದ್ದೇನೆ.

4:15b.1CO.004.015 ನಿಮಗೆ ಕ್ರಿಸ್ತನಲ್ಲಿ ಉಪಾಧ್ಯಾಯರು ಹತ್ತು ಸಾವಿರ ಮಂದಿ ಇದ್ದರೂ ತಂದೆಗಳು ಬಹು ಮಂದಿ ಇಲ್ಲ; ನಾನೇ ನಿಮ್ಮನ್ನು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ಪಡೆದೆನು.

4:16b.1CO.004.016 ಆದದರಿಂದ ನನ್ನನ್ನು ಹಿಂಬಾಲಿಸ ಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

4:17b.1CO.004.017 ಈ ಕಾರಣ ದಿಂದ ಕರ್ತನಲ್ಲಿ ನನ್ನ ಪ್ರಿಯ ಮಗನಾದ ತಿಮೊಥೆ ಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೆನೆ; ಅವನು ಕರ್ತನಲ್ಲಿ ನಂಬಿಗಸ್ತನಾಗಿದ್ದಾನೆ; ಅವನು ಕ್ರಿಸ್ತನಲ್ಲಿ ನನ್ನ ನಡಾವಳಿಯನ್ನು ಅಂದರೆ ನಾನು ಎಲ್ಲೆಲ್ಲಿಯೂ ಪ್ರತಿಯೊಂದು ಸಭೆಯಲ್ಲಿಯೂ ಬೋಧಿಸುವ ಕ್ರಮ ವನ್ನು ನಿಮ್ಮ ನೆನಪಿಗೆ ತರು

4:18b.1CO.004.018 ನಾನು ನಿಮ್ಮ ಬಳಿಗೆ ಬರುವದಿಲ್ಲವೇನೋ ಎಂದು ಕೆಲವರು ಉಬ್ಬಿಕೊಂಡಿದ್ದಾರೆ.

4:19b.1CO.004.019 ಆದರೆ ಕರ್ತನ ಚಿತ್ತವಿದ್ದರೆ ನಾನು ಬೇಗ ನಿಮ್ಮ ಬಳಿಗೆ ಬಂದು ಉಬ್ಬಿಕೊಂಡಿ ರುವವರ ಮಾತನ್ನಲ್ಲ, ಅವರ ಶಕ್ತಿಯನ್ನೇ ಗೊತ್ತು ಮಾಡಿಕೊಳ್ಳುವೆನು.

4:20b.1CO.004.020 ದೇವರ ರಾಜ್ಯವು ಮಾತಿನಲ್ಲಿ ಇಲ್ಲ, ಆದರೆ ಶಕ್ತಿಯಲ್ಲಿಯೇ ಆಧಾರಗೊಂಡಿದೆ.ನಿಮ್ಮ ಇಷ್ಟವೇನು? ನಾನು ಬೆತ್ತತೆಗೆದುಕೊಂಡು ನಿಮ್ಮ ಬಳಿಗೆ ಬರಲೋ? ಪ್ರೀತಿಯಿಂದಲೂ ಸೌಮ್ಯ ಭಾವದಿಂದಲೂ ಕೂಡಿದವನಾಗಿ ಬರಲೋ?

4:21b.1CO.004.021 ನಿಮ್ಮ ಇಷ್ಟವೇನು? ನಾನು ಬೆತ್ತತೆಗೆದುಕೊಂಡು ನಿಮ್ಮ ಬಳಿಗೆ ಬರಲೋ? ಪ್ರೀತಿಯಿಂದಲೂ ಸೌಮ್ಯ ಭಾವದಿಂದಲೂ ಕೂಡಿದವನಾಗಿ ಬರಲೋ?

5

5:1b.1CO.005.001 ನಿಮ್ಮಲ್ಲಿ ಜಾರತ್ವವಿದೆಯೆಂದು ಸಾಧಾರಣ ವಾಗಿ ಹೇಳಲ್ಪಟ್ಟಿದೆ; ಒಬ್ಬನು ತನ್ನ ಅಪ್ಪನ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ; ಅಂಥ ಜಾರತ್ವವು ಅನ್ಯಜನರಲ್ಲಿಯೂ ಇಲ್ಲ.

5:2b.1CO.005.002 ಆದರೆ ಇಂಥ ಕೆಲಸ ಮಾಡಿದವನನ್ನು ನೀವು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕದೆಯೂ ದುಃಖಪಡದೆಯೂ ಉಬ್ಬಿಕೊಂಡ ವರಾಗಿಯೇ ಇದ್ದೀರಿ.

5:3b.1CO.005.003 ನಾನಂತೂ ದೇಹದಿಂ ದೂರವಾಗಿದ್ದರೂ ಆತ್ಮದಿಂದ ಹತ್ತಿರದಲ್ಲಿದ್ದು ಇಂಥ ಕಾರ್ಯಮಾಡಿದವನನ್ನು ಕುರಿತು ನಿಜವಾಗಿ ಆಗಲೇ ಹತ್ತಿರವಿದ್ದವನಂತೆ ತೀರ್ಪುಮಾಡಿದ್ದೇನೆ.

5:4b.1CO.005.004 ನೀವೂ ನನ್ನಾತ್ಮವೂ ಕರ್ತನಾದ ಯೇಸುವಿನ ಸಾಮರ್ಥ್ಯ ಸಹಿತ ಒಟ್ಟುಗೂಡಿ ಬಂದಿರಲಾಗಿ

5:5b.1CO.005.005 ಕರ್ತನಾದ ಯೇಸುಕ್ರಿಸ್ತನ ಪ್ರತ್ಯಕ್ಷತೆಯ ದಿನದಲ್ಲಿ ಅಂಥವನ ಆತ್ಮವು ರಕ್ಷಣೆ ಹೊಂದುವದಕ್ಕಾಗಿ ಅವನ ಶರೀರವು ನಾಶವಾಗ ಬೇಕೆಂದು ನಮ್ಮ ಕರ್ತನಾದ ಯೇಸುವಿನ ಹೆಸರಿನಲ್ಲಿ ಅವನನ್ನು ಸೈತಾನನಿಗೆ ಒಪ್ಪಿಸಿಕೊಡಬೇಕೆಂಬದೇ.

5:6b.1CO.005.006 ನೀವು ಹಿಗ್ಗುವದು ಒಳ್ಳೇದಲ್ಲ. ಸ್ವಲ್ಪ ಹುಳಿಯು ಕಣಿಕವನ್ನೆಲ್ಲಾ ಹುಳಿ ಮಾಡುತ್ತದೆಂಬದು ನಿಮಗೆ ತಿಳಿಯದೋ?

5:7b.1CO.005.007 ಆದದರಿಂದ ನೀವು ಹುಳಿ ಇಲ್ಲದ ವರಾದ ಕಾರಣ ಹೊಸ ಕಣಿಕವಾಗಿರುವಂತೆ ಆ ಹಳೇ ಹುಳಿಯನ್ನು ತೆಗೆದುಹಾಕಿರಿ. ಯಾಕಂದರೆ ನಮ್ಮ ಪಸ್ಕವಾಗಿರುವ ಕ್ರಿಸ್ತನೇ ನಮಗೋಸ್ಕರ ಯಜ್ಞಾರ್ಪಿತ ನಾಗಿದ್ದಾನೆ.

5:8b.1CO.005.008 ಆದಕಾರಣ ನಾವು ಹಳೇ ಹುಳಿಯನ್ನು ಅಂದರೆ ದುರ್ಮಾರ್ಗತ್ವ ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೆ ಸರಳತೆ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯಿಂದ ಹಬ್ಬವನ್ನು ಆಚರಿಸೋಣ.

5:9b.1CO.005.009 ಜಾರರ ಸಹವಾಸವನ್ನು ಮಾಡಬಾರದೆಂದು ಒಂದು ಪತ್ರಿಕೆಯಲ್ಲಿ ನಿಮಗೆ ಬರೆದಿದ್ದೆನು.

5:10b.1CO.005.010 ಈ ಲೋಕದಲ್ಲಿರುವ ಜಾರರು, ಲೋಭಿಗಳು, ಸುಲು ಕೊಳ್ಳುವವರು, ವಿಗ್ರಹಾರಾಧಕರು ಇವರನ್ನು ಬಿಟ್ಟು ಬಿಡಬೇಕೆಂದು ನನ್ನ ತಾತ್ವರ್ಯವಲ್ಲ; ಹಾಗೆ ಬಿಡ ಬೇಕಾದರೆ ನೀವು ಈ ಲೋಕವನ್ನೇ ಬಿಟ್ಟು ಹೋಗ ಬೇಕಾಗುವದು.

5:11b.1CO.005.011 ಆದರೆ ಸಹೋದರ ನೆನಿಸಿಕೊಂಡ ವನು ಜಾರನಾದರೂ ಲೋಭಿಯಾದರೂ ವಿಗ್ರಹಾ ರಾಧಕನಾದರೂ ಬೈಯುವವನಾದರೂ ಕುಡುಕ ನಾದರೂ ಸುಲುಕೊಳ್ಳುವವನಾದರೂ ಆಗಿದ್ದ ಪಕ್ಷದಲ್ಲಿ ಅಂಥವನ ಸಹವಾಸ ಮಾಡಬಾರದು, ಅಂಥವನ ಸಂಗಡ ಊಟ ಮಾಡಲೂಬಾರದು ಎಂದು ನಾನು ಈಗ ಬರೆದಿದ್ದೇನೆ.

5:12b.1CO.005.012 ಹೊರಗಿನವರಿಗೆ ಸಹ ತೀರ್ಪು ಮಾಡುವದಕ್ಕೆ ನನಗೇನಿದೆ? ಒಳಗಿನವರಿಗೆ ತೀರ್ಪು ಮಾಡುವವರು ನೀವೇ ಅಲ್ಲವೇ?ಹೊರಗಿನವರಿಗೆ ತೀರ್ಪುಮಾಡುವಾತನು ದೇವರು. ಆದದರಿಂದ ಆ ದುಷ್ಟನನ್ನು ನಿಮ್ಮ ಮಧ್ಯದಿಂದ ಹೊರಗೆ ಹಾಕಿರಿ.

5:13b.1CO.005.013 ಹೊರಗಿನವರಿಗೆ ತೀರ್ಪುಮಾಡುವಾತನು ದೇವರು. ಆದದರಿಂದ ಆ ದುಷ್ಟನನ್ನು ನಿಮ್ಮ ಮಧ್ಯದಿಂದ ಹೊರಗೆ ಹಾಕಿರಿ.

6

6:1b.1CO.006.001 ಒಬ್ಬನಿಗೆ ಮತ್ತೊಬ್ಬನ ಮೇಲೆ ವ್ಯಾಜ್ಯ ವಿದ್ದರೆ ನ್ಯಾಯವಿಚಾರಣೆಗಾಗಿ ಪರಿಶುದ್ಧರ ಮುಂದೆ ಹೋಗದೆ ಅನೀತಿವಂತರ ಮುಂದೆ ಹೋಗುವದಕ್ಕೆ ನಿಮ್ಮಲ್ಲಿ ಯಾವನಿಗಾದರೂ ಧೈರ್ಯ ವುಂಟೋ?

6:2b.1CO.006.002 ಪರಿಶುದ್ಧರು ಲೋಕಕ್ಕೆ ತೀರ್ಪುಮಾಡು ವರೆಂಬದು ನಿಮಗೆ ತಿಳಿಯದೋ? ಲೋಕವು ನಿಮ್ಮಿಂದ ತೀರ್ಪು ಹೊಂದಬೇಕಾಗಿರುವಾಗ ಅತ್ಯಲ್ಪವಾದವುಗಳ ವಿಷಯದಲ್ಲಿ ತೀರ್ಪುಮಾಡು ವದಕ್ಕೆ ನೀವು ಅಯೋಗ್ಯರಾಗಿದ್ದೀರೋ?

6:3b.1CO.006.003 ನಾವು ದೂತರಿಗೆ ತೀರ್ಪುಮಾಡುವೆವೆಂದು ನಿಮಗೆ ಗೊತ್ತಿಲ್ಲವೋ? ಹಾಗಾದರೆ ಐಹಿಕ ಜೀವಿತಕ್ಕೆ ಸಂಬಂಧ ಪಟ್ಟ ವಿಷಯಗಳಲ್ಲಿ ಇನ್ನು ಎಷ್ಟೋ ಹೆಚ್ಚಾಗಿ ತೀರ್ಪುಮಾಡಬಹುದಲ್ಲವೇ?

6:4b.1CO.006.004 ಐಹಿಕ ಜೀವನದ ವಿಷಯಗಳಲ್ಲಿ ನ್ಯಾಯತೀರಿಸತಕ್ಕವುಗಳು ನಿಮ್ಮಲ್ಲಿದ್ದರೆ ಸಭೆಯಲ್ಲಿ ಅತ್ಯಲ್ಪರೆಂದು ಎಣಿಸಲ್ಪಟ್ಟವರನ್ನು ತೀರ್ಪು ಮಾಡುವದಕ್ಕೆ ನೇಮಿಸಿರಿ.

6:5b.1CO.006.005 ನಿಮ್ಮನ್ನು ನಾಚಿಕೆ ಪಡಿಸುವದಕ್ಕೆ ಇದನ್ನು ಹೇಳುತ್ತೇನೆ. ತನ್ನ ಸಹೋದರರ ಮಧ್ಯದಲ್ಲಿ ನ್ಯಾಯತೀರಿಸಬಲ್ಲವನಾದ ಬುದ್ಧಿವಂತನು ನಿಮ್ಮಲ್ಲಿ ಒಬ್ಬನಾದರೂ ಇಲ್ಲವೋ?

6:6b.1CO.006.006 ಆದರೆ ಸಹೋದರನು ಸಹೋದರನ ಮೇಲೆ ವ್ಯಾಜ್ಯ ವಾಡುವದಲ್ಲದೆ ಅವಿಶ್ವಾಸಿಗಳ ಮುಂದೆಯೂ ಹೋಗುತ್ತಾನೆ.

6:7b.1CO.006.007 ಆದದರಿಂದ ಈಗ ನಿಮ್ಮಲ್ಲಿ ಒಬ್ಬನಿಗೆ ವಿರೋಧವಾಗಿ ಇನ್ನೊಬ್ಬನು ನ್ಯಾಯಸ್ಥಾನಕ್ಕೆ ಹೋಗುವದು ಶುದ್ಧ ತಪ್ಪು; ಇದಕ್ಕಿಂತ ನೀವು ಅನ್ಯಾಯವನ್ನು ಯಾಕೆ ಸಹಿಸಬಾರದು? ಇಲ್ಲವೆ (ಸೊತ್ತನ್ನು ಅಪಹರಿಸುವದನ್ನು) ನೀವು ಯಾಕೆ ಸಹಿಸಿಕೊಳ್ಳಬಾರದು?

6:8b.1CO.006.008 ನೀವು ನಿಮ್ಮ ಸಹೋದರ ರಿಗೆ ಅನ್ಯಾಯ ಮಾಡುತ್ತೀರಿ; ಅವರನ್ನೇ ಅಪಹರಿಸುತ್ತೀರಿ.

6:9b.1CO.006.009 ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು

6:10b.1CO.006.010 ಕಳ್ಳರು ಲೋಭಿಗಳು ಕುಡುಕರು ಬೈಯುವವರು ಸುಲು ಕೊಳ್ಳುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲ.

6:11b.1CO.006.011 ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.

6:12b.1CO.006.012 ನನಗೆ ಎಲ್ಲಾ ವಿಷಯಗಳು ನ್ಯಾಯಸಮ್ಮತ ವಾಗಿವೆ. ಆದರೆ ಎಲ್ಲವುಗಳು ವಿಹಿತವಾಗಿಲ್ಲ; ನನಗೆ ಎಲ್ಲಾ ವಿಷಯಗಳು ನ್ಯಾಯಸಮ್ಮತವಾಗಿವೆ, ಆದರೆ ನಾನು ಯಾವ ಅಧಿಕಾರಕ್ಕೂ ಒಳಪಡುವದಿಲ್ಲ.

6:13b.1CO.006.013 ಆಹಾರಪದಾರ್ಥಗಳು ಹೊಟ್ಟೆಗಾಗಿ, ಹೊಟ್ಟೆಯು ಆಹಾರಪದಾರ್ಥಗಳಿಗಾಗಿ ಇವೆ; ಆದರೆ ಅದನ್ನೂ ಅವುಗಳನ್ನೂ ದೇವರು ನಾಶಮಾಡುತ್ತಾನೆ; ಈಗ ದೇಹವು ಜಾರತ್ವಕ್ಕಾಗಿ ಅಲ್ಲ, ಆದರೆ ಕರ್ತನಿಗಾಗಿ ಇದೆ; ಕರ್ತನು ದೇಹಕ್ಕೋಸ್ಕರ ಇದ್ದಾನೆ.

6:14b.1CO.006.014 ದೇವರು ಕರ್ತನನ್ನು ಎಬ್ಬಿಸಿದ್ದಲ್ಲದೆ ತನ್ನ ಸ್ವಂತಬಲದಿಂದ ನಮ್ಮನ್ನೂ ಎಬ್ಬಿಸುವನು.

6:15b.1CO.006.015 ನಿಮ್ಮ ದೇಹಗಳು ಕ್ರಿಸ್ತನ ಅಂಗಗಳಾಗಿವೆ ಎಂಬದು ನಿಮಗೆ ತಿಳಿಯದೋ? ಹೀಗಿರಲಾಗಿ ಕ್ರಿಸ್ತನ ಅಂಗಗಳನ್ನು ನಾನು ತೆಗೆದುಬಿಟ್ಟು ಸೂಳೆಯ ಅಂಗಗಳಾಗ ಮಾಡಬಹುದೋ? ಹಾಗೆ ಎಂದಿಗೂ ಆಗಬಾರದು.

6:16b.1CO.006.016 ಏನು? ಸೂಳೆಯನ್ನು ಸೇರಿಕೊಳ್ಳುವವನು ಅವಳೊಂದಿಗೆ ಒಂದೇ ದೇಹ ವಾಗಿದ್ದಾನೆಂಬದು ನಿಮಗೆ ತಿಳಿಯದೋ? ಇಬ್ಬರು ಒಂದೇ ಶರೀರವಾಗಿರುವರೆಂದು ಆತನು ಹೇಳು ತ್ತಾನಲ್ಲಾ.

6:17b.1CO.006.017 ಆದರೆ ಕರ್ತನನ್ನು ಸೇರಿಕೊಳ್ಳುವವನು ಒಂದೇ ಆತ್ಮವಾಗಿದ್ದಾನೆ.

6:18b.1CO.006.018 ಜಾರತ್ವಕ್ಕೆ ದೂರವಾಗಿ ಓಡಿಹೋಗಿರಿ. ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹಕ್ಕೆ ಹೊರತಾಗಿವೆ. ಆದರೆ ಜಾರತ್ವ ಮಾಡುವವನು ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪವನ್ನು ಮಾಡುತ್ತಾನೆ.

6:19b.1CO.006.019 ಏನು? ದೇವರಿಂದ ದೊರಕಿ ನಿಮ್ಮೊಳಗೆ ನೆಲೆಗೊಂಡಿರುವ ಪವಿತ್ರಾತ್ಮನಿಗೆ ನಿಮ್ಮ ದೇಹವು ಆಲಯವಾಗಿದೆಯೆಂಬದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ;ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.

6:20b.1CO.006.020 ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.

7

7:1b.1CO.007.001 ನೀವು ನನಗೆ ಬರೆದವುಗಳ ವಿಷಯ ವಾಗಿ--ಸ್ತ್ರೀಯನ್ನು ಮುಟ್ಟದಿರುವದು ಮನುಷ್ಯನಿಗೆ ಒಳ್ಳೇದು.

7:2b.1CO.007.002 ಆದಾಗ್ಯೂ ಜಾರತ್ವಕ್ಕೆ ದೂರವಿರುವಂತೆ ಪ್ರತಿ ಮನುಷ್ಯನಿಗೆ ಅವನ ಸ್ವಂತ ಹೆಂಡತಿಯೂ ಪ್ರತಿ ಸ್ತ್ರೀಗೆ ಅವಳ ಸ್ವಂತ ಗಂಡನೂ ಇರಲಿ.

7:3b.1CO.007.003 ಗಂಡನು ಹೆಂಡತಿಗೆ ಸಲ್ಲತಕ್ಕದ್ದನ್ನು ಸಲ್ಲಿಸಲಿ, ಹಾಗೆಯೇ ಹೆಂಡತಿಯು ಗಂಡನಿಗೆ ಸಲ್ಲಿಸಲಿ.

7:4b.1CO.007.004 ಹೆಂಡತಿಗೆ ತನ್ನ ಸ್ವಂತ ದೇಹದ ಮೇಲೆ ಅಧಿಕಾರ ವಿಲ್ಲ; ಆದರೆ ಗಂಡನಿಗುಂಟು. ಹಾಗೆಯೇ ಪುರುಷನಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ; ಆದರೆ ಹೆಂಡತಿಗುಂಟು.

7:5b.1CO.007.005 ಉಪವಾಸ ಮತ್ತು ಪ್ರಾರ್ಥನೆಗೆ ಮನಸ್ಸು ಕೊಡುವದಕ್ಕಾಗಿ ನೀವು ಪರಸ್ಪರ ಸಮ್ಮತಿ ಯಿಂದ ಸ್ವಲ್ಪಕಾಲ ಆಗಲಿರಬಹುದೇ ಹೊರತು ನಿಮಗೆ ದಮೆಯಿಲ್ಲದಿರುವದನ್ನು ನೋಡಿ ಸೈತಾನನು ನಿಮ್ಮನು ಶೋಧಿಸದಂತೆ ತಿರಿಗಿ ಕೂಡಿಕೊಳ್ಳಿರಿ.

7:6b.1CO.007.006 ಹೀಗೆ ನಾನು ಅನುಮತಿಯಿಂದಲೇ ಮಾತನಾಡುತ್ತೇನೆ, ಆದರೆ ಆಜ್ಞೆಯಲ್ಲ.

7:7b.1CO.007.007 ನಾನು ಇದ್ದಂತೆಯೇ ಎಲ್ಲರೂ ಇರ ಬೇಕೆಂದು ಇಚ್ಛಿಸುತ್ತೇನೆ. ಆದರೆ ಒಬ್ಬನು ಒಂದು ವಿಧದಲ್ಲಿ ಮತ್ತೊಬ್ಬನು ಇನ್ನೊಂದು ವಿಧದಲ್ಲಿ ಹೀಗೆ ಪ್ರತಿಯೊಬ್ಬನು ದೇವರಿಂದ ಅವನಿಗೆ ತಕ್ಕ ವರವನ್ನು ಹೊಂದಿದವನಾಗಿದ್ದಾನೆ.

7:8b.1CO.007.008 ಮದುವೆಯಿಲ್ಲದವರನ್ನೂ ವಿಧವೆಯರನ್ನೂ ಕುರಿತು ನಾನು ಹೇಳುವದೇ ನಂದರೆ--ನಾನಿರುವಂತೆಯೇ ಇರುವದು ಅವರಿಗೆ ಒಳ್ಳೇದು;

7:9b.1CO.007.009 ಅವರು ದಮೆಯಿಲ್ಲದವರಾದರೆ ಮದುವೆ ಮಾಡಿಕೊಳ್ಳಲಿ; ತಾಪಪಡುವದಕ್ಕಿಂತ ಮದುವೆಮಾಡಿ ಕೊಳ್ಳುವದು ಉತ್ತಮ.

7:10b.1CO.007.010 ಮದುವೆ ಮಾಡಿಕೊಂಡಿರು ವವರಿಗೆ ನನ್ನ ಅಪ್ಪಣೆ ಮಾತ್ರವಲ್ಲದೆ ಕರ್ತನ ಅಪ್ಪಣೆ ಏನಂದರೆ--ಹೆಂಡತಿಯು ಗಂಡನನ್ನು ಬಿಟ್ಟು ಅಗಲ ಬಾರದು.

7:11b.1CO.007.011 ಒಂದು ವೇಳೆ ಅಗಲಿದರೂ ಮದುವೆ ಯಿಲ್ಲದೆ ಇರಬೇಕು, ಇಲ್ಲವೆ ಗಂಡನ ಸಂಗಡ ಸಮಾ ಧಾನವಾಗಬೇಕು; ಗಂಡನು ಹೆಂಡತಿಯನ್ನು ಬಿಡ ಬಾರದು.

7:12b.1CO.007.012 ಮಿಕ್ಕಾದವರ ವಿಷಯದಲ್ಲಿ ಕರ್ತನ ಮಾತು ಇಲ್ಲವಾದರೂ ನಾನು ಹೇಳುವದೇನಂದರೆ--ಒಬ್ಬ ಸಹೋದರನಿಗೆ ನಂಬಿಕೆಯಿಲ್ಲದ ಹೆಂಡತಿಯಿರಲಾಗಿ ಆಕೆಯು ಅವನೊಂದಿಗೆ ಇರುವದಕ್ಕೆ ಸಮ್ಮತಿಸದರೆ ಅವನು ಆಕೆಯನ್ನು ಬಿಡಬಾರದು.

7:13b.1CO.007.013 ಒಬ್ಬ ಸ್ತ್ರೀಗೆ ನಂಬಿಕೆಯಿಲ್ಲದ ಗಂಡನಿರಲಾಗಿ ಅವನು ಆಕೆಯೊಂದಿಗೆ ಇರುವದಕ್ಕೆ ಸಮ್ಮತಿಸಿದರೆ ಆಕೆಯು ಅವನನ್ನು ಬಿಡ ಬಾರದು.

7:14b.1CO.007.014 ಯಾಕಂದರೆ ನಂಬಿಕೆಯಿಲ್ಲದ ಗಂಡನು ತನ್ನ ಹೆಂಡತಿಯಲ್ಲಿ ಶುದ್ಧನಾಗಿದ್ದಾನೆ; ನಂಬಿಕೆಯಿಲ್ಲದ ಹೆಂಡತಿಯು ತನ್ನ ಗಂಡನಲ್ಲಿ ಶುದ್ಧಳಾಗಿದ್ದಾಳೆ. ಹಾಗಲ್ಲ ದಿದ್ದರೆ ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು; ಈಗಲಾದರೋ ಅವರು ಪವಿತ್ರರಾಗಿದ್ದಾರೆ.

7:15b.1CO.007.015 ಆದರೆ ನಂಬಿಕೆಯಿಲ್ಲದವನು ಅಗಲಬೇಕೆಂದಿದ್ದರೆ ಅಗಲಿ ಹೋಗಲಿ; ಇಂಥಾ ಸಂದರ್ಭಗಳಲ್ಲಿ ಸಹೋದರ ನಾಗಲಿ ಸಹೋದರಿಯಾಗಲಿ ಬದ್ಧರಲ್ಲ, ಸಮಾಧಾನ ದಲ್ಲಿರಬೇಕೆಂದು ದೇವರು ನಮ್ಮನ್ನು ಕರೆದಿದ್ದಾನೆ.

7:16b.1CO.007.016 ಓ ಹೆಂಡತಿಯೇ, ನಿನ್ನ ಗಂಡನನ್ನು ರಕ್ಷಿಸುವಿಯೋ ಏನೋ ನಿನಗೇನು ಗೊತ್ತು? ಓ ಗಂಡನೇ, ನಿನ್ನ ಹೆಂಡತಿಯನ್ನು ರಕ್ಷಿಸುವಿಯೋ ಏನೋ ನಿನಗೇನು ಗೊತ್ತು?

7:17b.1CO.007.017 ದೇವರು ಒಬ್ಬೊಬ್ಬನಿಗೆ ಹೇಗೆ ಹಂಚಿಕೊಟ್ಟನೋ ಮತ್ತು ಕರ್ತನು ಒಬ್ಬೊಬ್ಬನನ್ನು ಹೇಗೆ ಕರೆದನೋ ಅದಕ್ಕೆ ತಕ್ಕಂತೆ ನಡೆಯಲಿ; ಹೀಗೆ ನಾನು ಎಲ್ಲಾ ಸಭೆಗಳಲ್ಲಿಯೂ ನೇಮಕಮಾಡುತ್ತೇನೆ.

7:18b.1CO.007.018 ಸುನ್ನತಿ ಯಲ್ಲಿದ್ದು ಕರೆಯಲ್ಪಟ್ಟವನು ಯಾವನಾದರೂ ಇದ್ದಾನೋ? ಅವನು ಸುನ್ನತಿ ಇಲ್ಲದವನಂತಾಗ ಬಾರದು; ಸುನ್ನತಿ ಇಲ್ಲದೆ ಕರೆಯಲ್ಪಟ್ಟವನು ಯಾವ ನಾದರೂ ಇದ್ದಾನೋ? ಅವನು ಸುನ್ನತಿ ಮಾಡಿಸಿ ಕೊಳ್ಳಬಾರದು.

7:19b.1CO.007.019 ಸುನ್ನತಿಯಾದರೂ ಏನೂ ಇಲ್ಲ, ಸುನ್ನತಿಯಾಗದ್ದಿದರೂ ಏನೂ ಇಲ್ಲ; ಆದರೆ ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವದೇ ಆಗಿದೆ.

7:20b.1CO.007.020 ದೇವರು ಕರೆದಾಗ ಪ್ರತಿಯೊಬ್ಬನು ಯಾವ ಸ್ಥಿತಿಯಲ್ಲಿದ್ದನೋ ಆ ಸ್ಥಿತಿಯಲ್ಲಿಯೇ ಇರಬೇಕು.

7:21b.1CO.007.021 ಕರೆಯಲ್ಪಟ್ಟಾಗ ನೀನು ದಾಸನಾಗಿದ್ದೀಯೋ? ಅದಕ್ಕೆ ಚಿಂತಿಸಬೇಡ. ಆದರೆ ನೀನು ಸ್ವತಂತ್ರ ನಾಗುವದಾದರೆ ಅದು ಉತ್ತಮ.

7:22b.1CO.007.022 ಯಾವನು ದಾಸನಾಗಿದ್ದು ಕರ್ತನಿಂದ ಕರೆಯಲ್ಪಟ್ಟಿರುವನೋ ಅವನು ಕರ್ತನಿಂದ ಸ್ವತಂತ್ರನು; ಅದೇ ಪ್ರಕಾರ ಯಾವನು ಸ್ವತಂತ್ರನಾಗಿದ್ದು ಕರೆಯಲ್ಪಟ್ಟಿರುವನೋ ಅವನು ಕ್ರಿಸ್ತನಿಗೆ ದಾಸನು.

7:23b.1CO.007.023 ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು, ಮನುಷ್ಯರಿಗೆ ದಾಸರಾಗಬೇಡಿರಿ.

7:24b.1CO.007.024 ಸಹೋದರರೇ, ಪ್ರತಿಯೊಬ್ಬನು ಕರೆಯಲ್ಪಟ್ಟಾಗ ಯಾವ ಸ್ಥಿತಿಯಲ್ಲಿದ್ದನೋ ಅದೇ ಸ್ಥಿತಿಯಲ್ಲಿ ದೇವರೊಂದಿಗೆ ಇದ್ದುಕೊಂಡಿರಲಿ.

7:25b.1CO.007.025 ಕನ್ನಿಕೆಯರನ್ನು ಕುರಿತು ನನಗೆ ಕರ್ತನಿಂದ ಯಾವ ಆಜ್ಞೆಯೂ ಇಲ್ಲ; ಆದರೆ ನಂಬಿಗಸ್ತನಾಗಿರುವದಕ್ಕೆ ಕರ್ತನಿಂದ ಕರುಣೆಯನ್ನು ಹೊಂದಿದವನಾಗಿ ನನ್ನ ನಿರ್ಣಯವನ್ನು ಹೇಳುತ್ತೇನೆ.

7:26b.1CO.007.026 ಈಗಿನ ಕಷ್ಟದ ನಿಮಿತ್ತ ಹಾಗೆಯೇ ಇರುವದು ಒಳ್ಳೇದು; ಒಬ್ಬ ಮನುಷ್ಯನು ಇದ್ದ ಹಾಗೆಯೇ ಇರುವದು ಉತ್ತಮವೆಂದು ನಾನು ಭಾವಿಸುತ್ತೇನೆ.

7:27b.1CO.007.027 ಹೆಂಡತಿಯನ್ನು ಕಟ್ಟಿಕೊಂಡಿ ದ್ದೀಯೋ? ಬಿಡುಗಡೆಗಾಗಿ ಪ್ರಯತ್ನಿಸಬೇಡ; ಹೆಂಡತಿಯನ್ನು ಬಿಟ್ಟವನಾಗಿದ್ದೀಯೋ? ಹೆಂಡತಿಗಾಗಿ ಪ್ರಯತ್ನಿಸಬೇಡ.

7:28b.1CO.007.028 ಒಂದು ವೇಳೆ ನೀನು ಮದುವೆ ಮಾಡಿಕೊಂಡರೂ ಪಾಪವಲ್ಲ. ಕನ್ನಿಕೆಯು ಮದುವೆ ಮಾಡಿಕೊಂಡರೂ ಪಾಪವಲ್ಲ. ಆದಾಗ್ಯೂ ಅಂಥ ವರಿಗೆ ಶರೀರಸಂಬಂಧವಾಗಿ ಕಷ್ಟ ಸಂಭವಿಸುವದು; ಇದು ನಿಮಗೆ ಉಂಟಾಗಬಾರದೆಂದು ನನ್ನ ಅಪೇಕ್ಷೆ.

7:29b.1CO.007.029 ಆದರೆ ಸಹೋದರರೇ, ನಾನು ಹೇಳುವದೇ ನಂದರೆ--ಸಮಯವು ಸಂಕೋಚವಾದದ್ದರಿಂದ ಇನ್ನು ಮೇಲೆ ಹೆಂಡತಿಯುಳ್ಳವರು ಹೆಂಡತಿಯಿಲ್ಲದವ ರಂತೆಯೂ

7:30b.1CO.007.030 ಅಳುವವರು ಅಳದವರಂತೆಯೂ ಸಂತೋಷಪಡುವವರು ಸಂತೋಷಪಡದವ ರಂತೆಯೂ ಕೊಂಡುಕೊಳ್ಳುವವರು ಇಲ್ಲದವ ರಂತೆಯೂ

7:31b.1CO.007.031 ಲೋಕವನ್ನು ಅನುಭೋಗಿಸುವವರು ಅದನ್ನು ದುರುಪಯೋಗ ಮಾಡದವರಂತೆಯೂ ಇರಬೇಕು; ಯಾಕಂದರೆ ಈ ಲೋಕದ ಆಡಂಬರವು ಗತಿಸಿಹೋಗುತ್ತದೆ.

7:32b.1CO.007.032 ಆದರೆ ನೀವು ಚಿಂತೆಯಿಲ್ಲದವರಾಗಿರಬೇಕೆಂಬದು ನನ್ನ ಇಷ್ಟ. ಮದುವೆಯಿಲ್ಲದವನು ತಾನು ಕರ್ತನನ್ನು ಹೇಗೆ ಮೆಚ್ಚಿಸಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ.

7:33b.1CO.007.033 ಮದುವೆ ಯಾದವನು ತನ್ನ ಹೆಂಡತಿಯನ್ನು ಹೇಗೆ ಮೆಚ್ಚಿಸ ಬೇಕೆಂದು ಪ್ರಪಂಚದವುಗಳನ್ನು ಕುರಿತು ಚಿಂತಿಸುತ್ತಾನೆ.

7:34b.1CO.007.034 ಅದರಂತೆ ಮದುವೆಯಾದವಳಿಗೂ ಕನ್ನಿಕೆಗೂ ವ್ಯತ್ಯಾಸವುಂಟು; ಮದುವೆಯಾಗದವಳು ತಾನು ದೇಹಾತ್ಮಗಳಲ್ಲಿ ಪವಿತ್ರಳಾಗಿರಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾಳೆ; ಮದುವೆ ಯಾದವಳು ತನ್ನ ಗಂಡನನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದವುಗಳನ್ನು ಕುರಿತು

7:35b.1CO.007.035 ನಾನು ನಿಮಗೆ ಉರ್ಲುಹಾಕುವದಕ್ಕಾಗಿ ಅಲ್ಲ; ಆದರೆ ಯೋಗ್ಯವಾದದ್ದಕ್ಕಾಗಿಯೂ ನೀವು ಕರ್ತನಿಗೆ ದೃಢ ನಿಷ್ಠೆಯುಳ್ಳವರಾಗಿಯೂ ಇರುವಂತೆ ನಿಮ್ಮ ಸ್ವಂತ ಹಿತಕ್ಕಾಗಿಯೇ ಹೇಳುತ್ತೇನೆ.

7:36b.1CO.007.036 ಒಬ್ಬನು ತನ್ನ ಕನ್ನಿಕೆಗೆ ಮದುವೆಯಿಲ್ಲದಿರುವದು ಮರ್ಯಾದೆಯಲ್ಲವೆಂದು ಭಾವಿಸಿದರೆ ಮತ್ತು ಆಕೆಗೆ ಪ್ರಾಯ ಕಳೆದುಹೋಗು ತ್ತದಲ್ಲಾ, ಮದುವೆಯಾಗುವದು ಅವಶ್ಯವೆಂದು ಅವನಿಗೆ ಕಂಡರೆ ತನ್ನಿಷ್ಟದಂತೆ ಮಾಡಲಿ, ಅವನು ಪಾಪಮಾಡುವದಿಲ್ಲ, ಅವರು ಮದುವೆಮಾಡಿ ಕೊಳ್ಳಲಿ.

7:37b.1CO.007.037 ಆದರೆ ಒಬ್ಬನು ದೃಢಚಿತ್ತನಾಗಿದ್ದು ಬಲವಂತವೇನೂ ಇಲ್ಲದೆ ತನ್ನಿಷ್ಟವನ್ನು ನಡಿಸುವದಕ್ಕೆ ಹಕ್ಕುಳ್ಳವನಾಗಿ ತನ್ನ ಕನ್ನಿಕೆಯನ್ನು ಮದುವೆಮಾಡಿ ಕೊಡುವದಿಲ್ಲವೆಂದು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡರೆ ಅವನು ಹಾಗೆ ಮಾಡುವದು ಒಳ್ಳೇದು.

7:38b.1CO.007.038 ಹಾಗಾದರೆ ಆಕೆಯನ್ನು ಮದುವೆ ಮಾಡಿಕೊಡು ವವನು ಒಳ್ಳೇದನ್ನು ಮಾಡುತ್ತಾನೆ. ಮದುವೆಮಾಡಿ ಕೊಡದೆ ಇರುವವನು ಇನ್ನೂ ಒಳ್ಳೇದನ್ನು ಮಾಡುತ್ತಾನೆ.

7:39b.1CO.007.039 ಮದುವೆಯಾದವಳು ತನ್ನ ಗಂಡನು ಜೀವದಿಂದಿ ರುವ ತನಕ ಅವನಿಗೆ ಬದ್ಧಳಾಗಿದ್ದಾಳೆ; ಗಂಡನು ಸತ್ತಿದ್ದರೆ ಆಕೆಯು ಬೇಕಾದವನನ್ನು ಮದುವೆ ಮಾಡಿಕೊಳ್ಳು ವದಕ್ಕೆ ಸ್ವತಂತ್ರಳಾಗಿದ್ದಾಳೆ; ಆದರೆ ಇದು ಕರ್ತನಲ್ಲಿ ಆಗತಕ್ಕದ್ದು.ಆದರೂ ನನ್ನ ನಿರ್ಣಯಕ್ಕನುಸಾರ ಆಕೆಯು ಇದ್ದ ಹಾಗೆಯೇ ಇರುವದಾದರೆ ಆಕೆಯು ಭಾಗ್ಯವಂತಳು; ನನ್ನಲ್ಲಿ ದೇವರಾತ್ಮನು ಇದ್ದಾನೆಂದು ನಾನು ನೆನಸುತ್ತೇನೆ.

7:40b.1CO.007.040 ಆದರೂ ನನ್ನ ನಿರ್ಣಯಕ್ಕನುಸಾರ ಆಕೆಯು ಇದ್ದ ಹಾಗೆಯೇ ಇರುವದಾದರೆ ಆಕೆಯು ಭಾಗ್ಯವಂತಳು; ನನ್ನಲ್ಲಿ ದೇವರಾತ್ಮನು ಇದ್ದಾನೆಂದು ನಾನು ನೆನಸುತ್ತೇನೆ.

8

8:1b.1CO.008.001 ವಿಗ್ರಹಗಳಿಗೆ ಸಮರ್ಪಣೆ ಮಾಡುವವು ಗಳ ವಿಷಯದಲ್ಲಿ ನಮ್ಮೆಲ್ಲರಿಗೂ ಜ್ಞಾನ ವಿದೆಯೆಂದು ನಾವು ಬಲ್ಲೆವು; ಜ್ಞಾನವು ಉಬ್ಬಿಕೊಳ್ಳುತ್ತದೆ, ಆದರೆ ಪ್ರಿತಿಯು ಭಕ್ತಿವೃದ್ಧಿಯನ್ನುಂಟುಮಾಡು ತ್ತದೆ.

8:2b.1CO.008.002 ಒಬ್ಬನು ತಾನು ಏನಾದರೂ ತಿಳಿದುಕೊಂಡಿ ದ್ದೇನೆಂದು ನೆನಸುವದಾದರೆ ಅವನು ತಿಳಿದುಕೊಳ್ಳ ಬೇಕಾಗಿರುವದನ್ನು ಇನ್ನೂ ತಿಳಿಯದವನಾಗಿದ್ದಾನೆ.

8:3b.1CO.008.003 ಆದರೆ ಯಾವನು ದೇವರನ್ನು ಪ್ರೀತಿಸುತ್ತಾನೋ ಅವನನ್ನೇ ದೇವರು ತಿಳಿದಿದ್ದಾನೆ.

8:4b.1CO.008.004 ವಿಗ್ರಹಗಳಿಗೆ ಸಮರ್ಪಣೆ ಮಾಡಿದವುಗಳನ್ನು ತಿನ್ನುವದರ ವಿಷ ಯದಲ್ಲಿ ನಾನು ಹೇಳುವದೇನಂದರೆ, ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದೂ ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ ನಾವು ಬಲ್ಲೆವು.

8:5b.1CO.008.005 ಆಕಾಶದಲ್ಲಿಯಾಗಲೀ ಭೂಮಿಯಲ್ಲಾಗಲೀ ದೇವರು ಗಳೆಂದು ಕರೆಯಲ್ಪಟ್ಟವುಗಳು ಇದ್ದಾಗ್ಯೂ (ಅನೇಕ ದೇವರುಗಳು ಮತ್ತು ಅನೇಕ ಪ್ರಭುಗಳು ಇರುತ್ತಾರೆ.)

8:6b.1CO.008.006 ನಮಗಾದರೋ ಒಬ್ಬನೇ ದೇವರಿದ್ದಾನೆ; ಆತನು ತಂದೆಯೆಂಬಾತನೇ; ಆತನು ಸಮಸ್ತಕ್ಕೂ ಮೂಲ ಕಾರಣನು; ನಾವು ಆತನಲ್ಲಿ ಇದ್ದೇವೆ. ಕರ್ತನಾದ ಯೇಸು ಕ್ರಿಸ್ತನು ಒಬ್ಬನೇ; ಆತನ ಮುಖಾಂತರ ಸಮಸ್ತವೂ ಉಂಟಾಯಿತು; ನಾವು ಆತನ ಮುಖಾಂತರ ಉಂಟಾದೆವು.

8:7b.1CO.008.007 ಆದರೆ ಆ ಜ್ಞಾನವು ಎಲ್ಲರಲ್ಲಿಯೂ ಇಲ್ಲ. ಕೆಲವರು ಈವರೆಗೂ ವಿಗ್ರಹದ ಬಳಿಗೆ ಹೋಗುವ ರೂಢಿಯಲ್ಲಿದ್ದದರಿಂದ ತಾವು ತಿನ್ನುವ ಪದಾರ್ಥಗಳನ್ನು ವಿಗ್ರಹಗಳಿಗೆ ಸಮರ್ಪಣೆ ಮಾಡಿದ್ದೆಂದು ತಿನ್ನುತ್ತಾರೆ; ಹೀಗೆ ಅವರ ಮನಸ್ಸು ಬಲಹೀನವಾಗಿರುವದರಿಂದ ಅಶುದ್ಧವಾಗಿದೆ.

8:8b.1CO.008.008 ಆದರೆ ಆಹಾರವು ನಮ್ಮನ್ನು ದೇವರಿಗೆ ಮೆಚ್ಚಿಕೆಯಾದವರನ್ನಾಗಿ ಮಾಡಲಾರದು; ಯಾಕಂದರೆ ನಾವು ತಿಂದರೆ ನಮ ಗೇನೂ ಹೆಚ್ಚಾಗುವದಿಲ್ಲ; ಇಲ್ಲವೆ ನಾವು ತಿನ್ನದಿದ್ದರೆ ನಮಗೇನೂ ಕಡಿಮೆಯಿಲ್ಲ.

8:9b.1CO.008.009 ಆದರೂ ಈ ನಿಮ್ಮ ಸ್ವಾತಂತ್ರ್ಯವು ಬಲವಿಲ್ಲದವರಿಗೆ ಒಂದು ವೇಳೆ ಅಭ್ಯಂತರ ವಾದೀತು, ಎಚ್ಚರಿಕೆಯಾಗಿರ್ರಿ.

8:10b.1CO.008.010 ಜ್ಞಾನಿಯಾದ ನೀನು ವಿಗ್ರಹಾಲಯದಲ್ಲಿ ಊಟಕ್ಕೆ ಕೂತಿರುವಾಗ ನಿರ್ಬಲ ವಾದ ಮನಸ್ಸಾಕ್ಷಿಯುಳ್ಳ ಯಾವನಾದರೂ ಕಂಡರೆ ಅವನೂ ವಿಗ್ರಹಕ್ಕೆ ಸಮರ್ಪಣೆ ಮಾಡಿದ ಪದಾರ್ಥ ಗಳನ್ನು ತಿನ್ನುವದಕ್ಕೆ ಧೈರ್ಯ ತಂದುಕೊಂಡಾನಲ್ಲವೇ?

8:11b.1CO.008.011 ಹೀಗೆ ಆ ಬಲಹೀನನಾದ ಸಹೋದರನು ನಿನ್ನ ಜ್ಞಾನದಿಂದ ನಾಶವಾಗುತ್ತಾನೆ; ಅವನಿಗಾಗಿಯೂ ಕ್ರಿಸ್ತನು ತನ್ನ ಪ್ರಾಣಕೊಟ್ಟನಲ್ಲವೇ?

8:12b.1CO.008.012 ಹೀಗಿರಲಾಗಿ ಸಹೋದರರಿಗೆ ವಿರೋಧವಾಗಿ ಪಾಪಮಾಡಿ ಅವರ ನಿರ್ಬಲವಾದ ಮನಸ್ಸನ್ನು ನೋಯಿಸಿ ಕ್ರಿಸ್ತನಿಗೆ ವಿರೋಧವಾಗಿ ಪಾಪ ಮಾಡುವವರಾಗುತ್ತೀರಿ.ಆದದರಿಂದ ಆಹಾರವು ನನ್ನ ಸಹೋದರನಿಗೆ ಅಭ್ಯಂತರವಾದರೆ ನಾನು ನನ್ನ ಸಹೋದರನಿಗೆ ಅಭ್ಯಂತರಪಡಿಸದಂತೆ ಎಂದಿಗೂ ಮಾಂಸ ತಿನ್ನುವದಿಲ್ಲ.

8:13b.1CO.008.013 ಆದದರಿಂದ ಆಹಾರವು ನನ್ನ ಸಹೋದರನಿಗೆ ಅಭ್ಯಂತರವಾದರೆ ನಾನು ನನ್ನ ಸಹೋದರನಿಗೆ ಅಭ್ಯಂತರಪಡಿಸದಂತೆ ಎಂದಿಗೂ ಮಾಂಸ ತಿನ್ನುವದಿಲ್ಲ.

9

9:1b.1CO.009.001 ನಾನು ಅಪೊಸ್ತಲನಲ್ಲವೇ? ನಾನು ಸ್ವತಂತ್ರನಲ್ಲವೇ? ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ನಾನು ನೋಡಿದವನಲ್ಲವೇ? ಕರ್ತನಲ್ಲಿ ನೀವು ನನ್ನ ಕೆಲಸವಲ್ಲವೇ?

9:2b.1CO.009.002 ನಾನು ಅಪೊಸ್ತಲನಲ್ಲವೇ? ನಾನು ಸ್ವತಂತ್ರನಲ್ಲವೇ? ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ನಾನು ನೋಡಿದವನಲ್ಲವೇ? ಕರ್ತನಲ್ಲಿ ನೀವು ನನ್ನ ಕೆಲಸವಲ್ಲವೇ?

9:3b.1CO.009.003 ನನ್ನನ್ನು ವಿಚಾರಿಸು ವವರಿಗೆ ಇದೇ ನನ್ನ ಉತ್ತರ.

9:4b.1CO.009.004 ತಿನ್ನುವದಕ್ಕೂ ಕುಡಿಯು ವದಕ್ಕೂ ನಮಗೆ ಹಕ್ಕಿಲ್ಲವೇ?

9:5b.1CO.009.005 ಸಹೋದರಿಯಾಗಿ ರುವ ಹೆಂಡತಿಯನ್ನು ಕರಕೊಂಡು ಸಂಚರಿಸುವದಕ್ಕೆ ಮಿಕ್ಕಾದ ಅಪೊಸ್ತಲರಂತೆಯೂ ಕರ್ತನ ಸಹೋದರ ರಂತೆಯೂ ಕೇಫನಂತೆಯೂ ನಮಗೆ ಅಧಿಕಾರ ವಿಲ್ಲವೇ?

9:6b.1CO.009.006 ಇಲ್ಲವೆ ಕೆಲಸಮಾಡದೆ ಇರುವದಕ್ಕೆ ನನಗೂ ಬಾರ್ನಬನಿಗೂ ಮಾತ್ರ ಅಧಿಕಾರವಿಲ್ಲವೇ?

9:7b.1CO.009.007 ಸ್ವಂತ ಖರ್ಚಿನಿಂದ ಯಾರಾದರೂ ಯಾವಾಗಲಾದರೂ ಯುದ್ಧಕ್ಕೆ ಹೋಗುವದುಂಟೇ? ದ್ರಾಕ್ಷೇ ತೋಟವನ್ನು ನೆಟ್ಟ ಯಾರಾದರೂ ಅದರ ಫಲವನ್ನು ತಿನ್ನದಿರುವ ದುಂಟೇ? ಇಲ್ಲವೆ ಮಂದೆಯನ್ನು ಮೇಯಿಸಿದ ಯಾರಾದರೂ ಮಂದೆಯ ಹೈನವನ್ನು ತಿನ್ನದಿರುವ ದುಂಟೇ?

9:8b.1CO.009.008 ಮನುಷ್ಯ ರೀತಿಯಲ್ಲಿ ನಾನು ಇವುಗಳನ್ನು ಹೇಳುತ್ತೇನೋ? ಇಲ್ಲವೆ ನ್ಯಾಯ ಪ್ರಮಾಣವು ಸಹ ಇದನ್ನು ಹೇಳುವದಿಲ್ಲವೋ?

9:9b.1CO.009.009 ಕಣತುಳಿಯುವ ಎತ್ತಿನ ಬಾಯನ್ನು ನೀನು ಕಟ್ಟಬಾರದು ಎಂದು ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದದೆ. ದೇವರು ಚಿಂತಿಸು ವದು ಎತ್ತುಗಳಿಗಾಗಿಯೋ?

9:10b.1CO.009.010 ಇಲ್ಲವೆ ನಮಗೋಸ್ಕರ ವಾಗಿಯೇ ಆತನು ಹೇಳುತ್ತಾನೋ? ಉಳುವವನು ನಿರೀಕ್ಷೆಯಿಂದ ಉಳಬೇಕು, ನಿರೀಕ್ಷೆಯಲ್ಲಿ ಕಣತುಳಿಸು ವವನು ತನ್ನ ನಿರೀಕ್ಷೆಯಲ್ಲಿ ಪಾಲುಗಾರನಾಗಿರಬೇಕು ಎಂದು ನಮಗೋಸ್ಕರ ನಿಸ್ಸಂದೇಹವಾಗಿ ಇದು ಬರೆಯಲ್ಪಟ್ಟಿತು.

9:11b.1CO.009.011 ನಾವು ನಿಮಗೋಸ್ಕರ ಆತ್ಮಸಂಬಂಧ ವಾದವುಗಳನ್ನು ಬಿತ್ತಿದ ಮೇಲೆ ನಿಮ್ಮಿಂದ ಶಾರೀರಿಕ ವಾದವುಗಳನ್ನು ಕೊಯ್ಯುವದು ದೊಡ್ಡದೋ?

9:12b.1CO.009.012 ನಿಮ್ಮ ಮೇಲಿರುವ ಅಧಿಕಾರದಲ್ಲಿ ಇತರರಿಗೆ ಪಾಲು ಇದ್ದರೆ ಅವರಿಗಿಂತ ನಮಗೆ ಎಷ್ಟೋ ಹೆಚ್ಚಾಗಿ ಇರಬೇಕಲ್ಲಾ. ಆದರೂ ನಾವು ಈ ಅಧಿಕಾರವನ್ನು ನಡಿಸದೆ ಕ್ರಿಸ್ತನ ಸುವಾರ್ತೆಗೆ ಅಡ್ಡಿಮಾಡಬಾರದೆಂದು ಎಲ್ಲವನ್ನು ಸಹಿಸಿ ಕೊಂಡಿರುತ್ತೇವೆ.

9:13b.1CO.009.013 ಪವಿತ್ರವಾದವುಗಳ ಸೇವೆ ಮಾಡುವವರು ಆಲಯದವುಗಳಿಂದ ಜೀವಿಸುವರೆಂದೂ ಯಜ್ಞವೇದಿಯ ಬಳಿಯಲ್ಲಿ ಸೇವೆ ಮಾಡುವವರು ಯಜ್ಞವೇದಿಯೊಂದಿಗೆ ಪಾಲುಗಾರರೆಂದೂ ನಿಮಗೆ ಗೊತ್ತಿಲ್ಲವೋ?

9:14b.1CO.009.014 ಅದೇ ರೀತಿಯಾಗಿ ಸುವಾರ್ತೆಯನ್ನು ಸಾರುವವರು ಸುವಾರ್ತೆಯಿಂದಲೇ ಜೀವನ ಮಾಡ ಬೇಕೆಂದು ಕರ್ತನು ನೇಮಿಸಿದನು.

9:15b.1CO.009.015 ಆದರೆ ಇವುಗಳಲ್ಲಿ ಒಂದನ್ನೂ ನಾನು ಉಪ ಯೋಗಿಸಲಿಲ್ಲ; ಇಲ್ಲವೆ ನನಗೆ ಹಾಗೆ ಆಗಲೆಂದು ನಾನು ಈ ವಿಷಯಗಳನ್ನು ಬರೆಯಲೂ ಇಲ್ಲ; ಯಾಕಂದರೆ ನಾನು ಹೆಚ್ಚಳಪಡುವದನ್ನು ಯಾವ ನಾದರೂ ವ್ಯರ್ಥ ಮಾಡುವದಕ್ಕಿಂತ ಸಾಯುವದೇ ನನಗೆ ಮೇಲು.

9:16b.1CO.009.016 ನಾನು ಸುವಾರ್ತೆಯನ್ನು ಸಾರಿದರೂ ಹೆಚ್ಚಳ ಪಡುವದಕ್ಕೆ ನನಗೇನೂ ಇಲ್ಲ; ಸಾರಲೇ ಬೇಕೆಂಬ ನಿರ್ಬಂಧ ನನ್ನ ಮೇಲೆ ಇದೆ. ಹೌದು, ನಾನು ಸುವಾರ್ತೆಯನ್ನು ಸಾರದಿದ್ದರೆ ನನಗೆ ಅಯ್ಯೋ!

9:17b.1CO.009.017 ನಾನು ಇದನ್ನು ಇಷ್ಟಪೂರ್ವಕವಾಗಿ ಮಾಡಿದರೆ ನನಗೆ ಬಹುಮಾನವುಂಟು. ನನ್ನ ಇಷ್ಟಕ್ಕೆ ವಿರೋಧ ವಾಗಿ ಮಾಡಿದರೆ ಸುವಾರ್ತೆಯ ವಿಷಯವಾದ ದೈವನೇಮವು ನನ್ನ ವಶಕ್ಕೆ ಕೊಡಲ್ಪಟ್ಟಿದೆ.

9:18b.1CO.009.018 ಹಾಗಾ ದರೆ ನನ್ನ ಬಹುಮಾನ ಯಾವದು? ನಿಶ್ಚಯವಾಗಿ ನಾನು ಸುವಾರ್ತೆಯನ್ನು ಸಾರುವಾಗ ಸುವಾರ್ತೆ ಯಲ್ಲಿರುವ ನನ್ನ ಅಧಿಕಾರವನ್ನು ನಾನು ದುರುಪ ಯೋಗ ಮಾಡದಂತೆ ಕ್ರಿಸ್ತನ ಸುವಾರ್ತೆಯನ್ನು ಉಚಿತವಾಗಿ ಸಾರುವದೇ ನನ್ನ ಬಹುಮಾನ.

9:19b.1CO.009.019 ಎಲ್ಲರಿಂದಲೂ ನಾನು ಸ್ವತಂತ್ರನಾಗಿದ್ದರೂ ಇನ್ನೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳುವದಕ್ಕೋಸ್ಕರ ನನ್ನನ್ನು ಎಲ್ಲರಿಗೂ ಸೇವಕನನ್ನಾಗಿ ಮಾಡಿಕೊಂಡಿದ್ದೇನೆ.

9:20b.1CO.009.020 ಇದಲ್ಲದೆ ಯೆಹೂದ್ಯರನ್ನು ಸಂಪಾದಿಸಿಕೊಳ್ಳುವಂತೆ ಯೆಹೂದ್ಯರಿಗೆ ನಾನು ಯೆಹೂದ್ಯನಾಗಿಯೂ ನ್ಯಾಯ ಪ್ರಮಾಣದ ಅಧೀನದಲ್ಲಿರುವವರನ್ನು ಸಂಪಾದಿಸಿ ಕೊಳ್ಳುವಂತೆ ನ್ಯಾಯಪ್ರಮಾಣಕ್ಕೆ ಅಧೀನರಾಗಿರು ವವರಿಗೆ ನ್ಯಾಯಪ್ರಮಾಣಕ್ಕೆ ಅಧೀನನಾಗಿಯೂ

9:21b.1CO.009.021 (ನಾನು ದೇವರ ನ್ಯಾಯಪ್ರಮಾಣವಿಲ್ಲದವ ನಂತಲ್ಲ, ಕ್ರಿಸ್ತನ ನ್ಯಾಯಪ್ರಮಾಣಕ್ಕೆ ಒಳಗಾದವನೇ;) ನ್ಯಾಯಪ್ರಮಾಣವಿಲ್ಲದವರನ್ನು ಸಂಪಾದಿಸಿಕೊಳ್ಳು ವದಕ್ಕಾಗಿ ಅವರಿಗೆ ನ್ಯಾಯಪ್ರಮಾಣವಿಲ್ಲದವ ನಂತೆಯೂ ಆದೆನು.

9:22b.1CO.009.022 ಬಲವಿಲ್ಲದವರನ್ನು ಸಂಪಾದಿಸು ವದಕ್ಕೆ ಅವರಿಗೆ ಬಲವಿಲ್ಲದವನಂತಾದೆನು; ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಯಾರಾರಿಗೆ ಎಂಥೆಂಥವನಾಗಬೇಕೋ ಅಂಥವನಾಗಿದ್ದೇನೆ.

9:23b.1CO.009.023 ನಾನು ನಿಮ್ಮೊಂದಿಗೆ ಸುವಾರ್ತೆಯ ಫಲದಲ್ಲಿ ಪಾಲುಗಾರನಾಗಬೇಕೆಂದು ಸುವಾರ್ತೆ ಗೋಸ್ಕರವೇ ಇದನ್ನು ಮಾಡುತ್ತೇನೆ.

9:24b.1CO.009.024 ರಂಗಸ್ಥಾನದಲ್ಲಿ ಓಡುವವರೆಲ್ಲರೂ ಓಡುತ್ತಾರಾ ದರೂ ಒಬ್ಬನು ಮಾತ್ರ ಬಹುಮಾನವನ್ನು ಹೊಂದುತ್ತಾ ನೆಂಬದು ನಿಮಗೆ ತಿಳಿಯದೋ? ಅವರಂತೆ ನೀವೂ ಬಹುಮಾನವನ್ನು ಪಡಕೊಳ್ಳಬೇಕೆಂತಲೇ ಓಡಿರಿ.

9:25b.1CO.009.025 ಪ್ರವೀಣತೆಗಾಗಿ ಹೋರಾಡುವ ಪ್ರತಿಯೊಬ್ಬನು ಎಲ್ಲಾ ವಿಷಯಗಳಲ್ಲಿ ಮಿತವಾಗಿರುತ್ತಾನೆ; ಅವರಾ ದರೋ ನಾಶವಾಗುವ ಕಿರೀಟವನ್ನು ಹೊಂದಿಕೊಳ್ಳು ವದಕ್ಕಾಗಿ ಹೋರಾಡುತ್ತಾರೆ; ನಾವಾದರೋ ನಾಶ ವಾಗದ ಕಿರೀಟಕ್ಕಾಗಿಯೇ ಹೋರಾಡುತ್ತೇವೆ.

9:26b.1CO.009.026 ಹೀಗಿರಲಾಗಿ ನಾನು ಸಹ ಗುರಿಗೊತ್ತಿಲ್ಲದವನಾಗಿ ಓಡದೆ ಗೆಲ್ಲಬೇಕೆಂದು ಅವರಂತೆಯೇ ಓಡುತ್ತೇನೆ; ನಾನು ಗಾಳಿಯನ್ನು ಗುದ್ದುವವನಾಗಿರದೆ ಗೆಲ್ಲಬೇಕೆಂದು ಹೋರಾಡುತ್ತೇನೆ.ಆದರೆ ನಾನು ಬೇರೆಯವರಿಗೆ ಸಾರಿದ ಮೇಲೆ ಯಾವ ವಿಧದಲ್ಲಿಯೂ ನಾನು ಭ್ರಷ್ಠನಾಗದಂತೆ ನನ್ನ ದೇಹವನ್ನು ಅಧೀನತೆಯಲ್ಲಿಟ್ಟು ಅದನ್ನು ಸ್ವಾಧೀನಪಡಿಸಿಕೊಳ್ಳುತ್ತೇನೆ.

9:27b.1CO.009.027 ಆದರೆ ನಾನು ಬೇರೆಯವರಿಗೆ ಸಾರಿದ ಮೇಲೆ ಯಾವ ವಿಧದಲ್ಲಿಯೂ ನಾನು ಭ್ರಷ್ಠನಾಗದಂತೆ ನನ್ನ ದೇಹವನ್ನು ಅಧೀನತೆಯಲ್ಲಿಟ್ಟು ಅದನ್ನು ಸ್ವಾಧೀನಪಡಿಸಿಕೊಳ್ಳುತ್ತೇನೆ.

10

10:1b.1CO.010.001 ಇದಲ್ಲದೆ ಸಹೋದರರೇ, ನೀವು ಈ ವಿಷಯಗಳನ್ನು ಅರಿಯದವರಾಗಿರ ಬಾರದೆಂದು ನನ್ನ ಅಪೇಕ್ಷೆಯಲ್ಲ; ಅದೇನಂದರೆ--ನಮ್ಮ ಪಿತೃಗಳೆಲ್ಲರೂ ಮೇಘದ ಕೆಳಗೆ ಇದ್ದು ಸಮುದ್ರವನ್ನು ದಾಟಿದರು;

10:2b.1CO.010.002 ಅವರೆಲ್ಲರೂ ಮೋಶೆ ಗಾಗಿ ಮೇಘದಲ್ಲಿಯೂ ಸಮುದ್ರದಲ್ಲಿಯೂ ಬಾಪ್ತಿಸ್ಮ ಹೊಂದಿದರು;

10:3b.1CO.010.003 ಅವರೆಲ್ಲರೂ ಆತ್ಮಿಕವಾದ ಒಂದೇ ಆಹಾರವನ್ನು ತಿಂದರು;

10:4b.1CO.010.004 ಅವರೆಲ್ಲರೂ ಆತ್ಮಿಕವಾದ ಒಂದೇ ಪಾನವನ್ನು ಕುಡಿದರು; ಯಾಕಂದರೆ ಅವರನ್ನು ಹಿಂಬಾಲಿಸಿದ ಆ ಆತ್ಮಿಕ ಬಂಡೆಯೊಳಗಿಂದ ಅವರು ಕುಡಿದರು; ಆ ಬಂಡೆಯು ಕ್ರಿಸ್ತನೇ.

10:5b.1CO.010.005 ಆದರೆ ಅವ ರೊಳಗೆ ಅನೇಕರ ವಿಷಯದಲ್ಲಿ ದೇವರು ಸಂತೋಷಿ ಸಲಿಲ್ಲ; ಯಾಕಂದರೆ ಅವರು ಅಡವಿಯೊಳಗೆ ಸಂಹರಿ ಸಲ್ಪಟ್ಟರು.

10:6b.1CO.010.006 ಅವರು ಕೆಟ್ಟವಿಷಯಗಳನ್ನು ಆಶಿಸಿದಂತೆ ನಾವು ಆಶಿಸುವವರಾಗಬಾರದೆಂಬದಕ್ಕಾಗಿ ಈ ಸಂಗತಿ ಗಳು ನಮಗೆ ನಿದರ್ಶನಗಳಾಗಿವೆ.

10:7b.1CO.010.007 ಇಲ್ಲವೆ--ಜನರು ತಿನ್ನುವದಕ್ಕೂ ಕುಡಿಯುವದಕ್ಕೂ ಕೂತುಕೊಂಡರು; ಆಟವಾಡುವದಕ್ಕೆ ಎದ್ದರು ಎಂದು ಬರೆದಿರುವ ಪ್ರಕಾರ ನೀವೂ ಅವರಲ್ಲಿ ಕೆಲವರಂತೆ ವಿಗ್ರಹಾರಾಧಕರಾಗ ಬೇಡಿರಿ.

10:8b.1CO.010.008 ಅವರಲ್ಲಿ ಕೆಲವರು ಜಾರತ್ವಮಾಡಿ ಒಂದೇ ದಿನದಲ್ಲಿ ಇಪ್ಪತ್ತುಮೂರು ಸಾವಿರ ಮಂದಿ ಸತ್ತರು; ನಾವು ಜಾರತ್ವ ಮಾಡದೆ ಇರೋಣ.

10:9b.1CO.010.009 ಇದಲ್ಲದೆ ನಾವು ಕ್ರಿಸ್ತನನ್ನು ಪರಿಶೋಧಿಸದೆ ಇರೋಣ; ಯಾಕಂದರೆ ಅವರಲ್ಲಿಯೂ ಕೆಲವರು ಪರಿಶೋಧಿಸಿ ಸರ್ಪಗಳಿಂದ ಸಂಹಾರವಾದರು.

10:10b.1CO.010.010 ಇದಲ್ಲದೆ ಅವರಲ್ಲಿ ಕೆಲವರು ಗುಣುಗುಟ್ಟಿ ಸಂಹಾರಕನ ಕೈಯಿಂದ ನಾಶ ವಾದರು; ಆದದರಿಂದ ನೀವು ಗುಣುಗುಟ್ಟಬೇಡಿರಿ.

10:11b.1CO.010.011 ಅವರಿಗೆ ಸಂಭವಿಸಿದ ಈ ಎಲ್ಲಾ ಸಂಗತಿಗಳು ನಿದರ್ಶನಗಳಾಗಿವೆ; ಲೋಕದ ಅಂತ್ಯಕ್ಕೆ ಬಂದಿರುವ ವರಾದ ನಮಗೆ ಅವು ಬುದ್ಧಿವಾದಗಳಾಗಿ ಬರೆದವೆ.

10:12b.1CO.010.012 ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳ ದಂತೆ ಎಚ್ಚರಿಕೆಯಾಗಿರಲಿ.

10:13b.1CO.010.013 ಮನುಷ್ಯನಿಗೆ ಸಾಮಾನ್ಯ ವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ; ಆದರೆ ದೇವರು ನಂಬಿಗಸ್ತನು; ನೀವು ಸಹಿಸುವದಕ್ಕಿಂತ ಹೆಚ್ಚಿನ ಶೋಧನೆಯನ್ನು ಆತನು ನಿಮಗೆ ಬರಮಾಡುವದಿಲ್ಲ; ಆದರೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧ

10:14b.1CO.010.014 ಆದದರಿಂದ ನನ್ನ ಅತಿ ಪ್ರಿಯವಾದವರೇ, ವಿಗ್ರಹಾರಾಧನೆಯಿಂದ ಓಡಿಹೋಗಿರಿ.

10:15b.1CO.010.015 ನೀವು ವಿವೇಕಿಗಳೆಂದು ಇದನ್ನು ಹೇಳುತ್ತೇನೆ; ನಾನು ಹೇಳುವ ದನ್ನು ನೀವೇ ಯೋಚಿಸಿರಿ.

10:16b.1CO.010.016 ನಾವು ಸ್ತೋತ್ರಸಲ್ಲಿಸುವ ಸ್ತೋತ್ರದ ಪಾತ್ರೆಯು ಕ್ರಿಸ್ತನ ರಕ್ತದ ಅನ್ಯೋನ್ಯತೆ ಯಲ್ಲವೋ? ನಾವು ಮುರಿಯುವ ರೊಟ್ಟಿಯು ಕ್ರಿಸ್ತನ ದೇಹದ ಅನ್ಯೋನ್ಯತೆಯಲ್ಲವೋ?

10:17b.1CO.010.017 ಅನೇಕರಾದ ನಾವು ಒಂದೇರೊಟ್ಟಿಯೂ ಒಂದೇದೇಹವೂ ಆಗಿದ್ದೇವೆ; ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಪಾಲುಗಾರರಾಗಿದ್ದೇವೆ.

10:18b.1CO.010.018 ಶರೀರದ ಪ್ರಕಾರ ಇಸ್ರಾಯೇಲ್ಯರನ್ನು ನೋಡಿರಿ; ಯಜ್ಞ ಮಾಡಿದವು ಗಳನ್ನು ತಿನ್ನುವವರು ಯಜ್ಞವೇದಿಯೊಂದಿಗೆ ಪಾಲು ಗಾರರಾಗಿದ್ದಾರಲ್ಲವೇ?

10:19b.1CO.010.019 ಹಾಗಾದರೆ ನಾನು ಏನು ಹೇಳಲಿ? ವಿಗ್ರಹವು ಏನಾದರೂ ವಿಶೇಷವೋ? ಇಲ್ಲವೆ ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ್ದು ಏನಾದರೂ ವಿಶೇಷವೋ?

10:20b.1CO.010.020 ಆದರೆ ಅನ್ಯಜನರು ಯಜ್ಞಾರ್ಪಣೆ ಮಾಡುವದು ದೆವ್ವಗಳಿಗೆ, ದೇವರಿಗಲ್ಲ; ನೀವು ದೆವ್ವಗಳೊಂದಿಗೆ ಅನ್ಯೋನ್ಯವಾಗಿರಬೇಕೆಂದು ನಾನು ಇಷ್ಟಪಡುವದಿಲ್ಲ.

10:21b.1CO.010.021 ನೀವು ಕರ್ತನಪಾತ್ರೆ ಯಲ್ಲಿಯೂ ದೆವ್ವಗಳ ಪಾತ್ರೆಯಲ್ಲಿಯೂ ಕುಡಿಯ ಲಾರಿರಿ; ನೀವು ಕರ್ತನ ಮೇಜಿನಲ್ಲಿಯೂ ದೆವ್ವಗಳ ಮೇಜಿನಲ್ಲಿಯೂ ಪಾಲುಗಾರರಾಗಲಾರಿರಿ.

10:22b.1CO.010.022 ಕರ್ತ ನನ್ನು ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೇನು?

10:23b.1CO.010.023 ನನಗೆ ಎಲ್ಲಾ ವಿಷಯಗಳು ನ್ಯಾಯಸಮ್ಮತ ವಾಗಿವೆ; ಆದರೆ ಎಲ್ಲವೂ ವಿಹಿತವಾಗಿರುವದಿಲ್ಲ; ಎಲ್ಲಾ ವಿಷಯಗಳು ನನಗೆ ನ್ಯಾಯಸಮ್ಮತವಾಗಿವೆ; ಆದರೆ ಎಲ್ಲವೂ ಭಕ್ತಿವೃದ್ಧಿಯನ್ನುಂಟು ಮಾಡುವದಿಲ್ಲ.

10:24b.1CO.010.024 ಪ್ರತಿಯೊಬ್ಬನು ತನ್ನ ಹಿತವನ್ನು ಚಿಂತಿಸದೆ ಪರ ಹಿತವನ್ನು ಚಿಂತಿಸಲಿ.

10:25b.1CO.010.025 ಕಟುಕರ ಅಂಗಡಿಯಲ್ಲಿ ಮಾರುವದೇನಿದ್ದರೂ ಮನಸ್ಸಾಕ್ಷಿಯ ನಿಮಿತ್ತ ಯಾವ ಪ್ರಶ್ನೆಯನ್ನೂ ಕೇಳದೆ ತಿನ್ನಿರಿ.

10:26b.1CO.010.026 ಭೂಮಿಯೂ ಅದರಲ್ಲಿರುವ ಸಮಸ್ತವೂ ಕರ್ತನದಾಗಿದೆಯಲ್ಲವೇ?

10:27b.1CO.010.027 ನಂಬದವರಲ್ಲಿ ಯಾವನಾದರೂ ನಿಮ್ಮನ್ನು ಊಟಕ್ಕೆ ಕರೆಯುವಾಗ ಹೋಗುವದಕ್ಕೆ ನಿಮಗಿಷ್ಟವಿದ್ದರೆ ನಿಮ ಗೇನು ಬಡಿಸಿದರೂ ಅದನ್ನು ಮನಸ್ಸಾಕ್ಷಿಯ ನಿಮಿತ್ತ ಯಾವ ಪ್ರಶ್ನೆಯನ್ನೂ ಕೇಳದೆ ತಿನ್ನಿರಿ.

10:28b.1CO.010.028 ಆದರೆ ಒಬ್ಬನು ನಿಮಗೆ--ಇದು ವಿಗ್ರಹಕ್ಕೆ ಬಲಿಕೊಟ್ಟದ್ದು ಎಂದು ಹೇಳಿದರೆ ಈ ವಿಷಯವನ್ನು ತಿಳಿಸಿದವನ ನಿಮಿತ್ತ ವಾಗಿಯೂ ಮನಸ್ಸಾಕ್ಷಿಯ ನಿಮಿತ್ತವಾಗಿಯೂ ತಿನ್ನ ಬೇಡಿರಿ; ಭೂಮಿಯೂ ಅದರಲ್ಲಿರುವ ಸಮಸ್ತವೂ ಕರ್ತನದಾಗಿದೆಯಲ್ಲವೇ?

10:29b.1CO.010.029 ಆದರೆ ನಿನ್ನ ಸ್ವಂತ ಮನಸ್ಸಾಕ್ಷಿಗಾಗಿ ಅಲ್ಲ, ಬೇರೆಯವನ ಮನಸ್ಸಾಕ್ಷಿಗಾಗಿ ನಾನು ಹೇಳುತ್ತೇನೆ. ಮತ್ತೊಬ್ಬನ ಮನಸ್ಸಾಕ್ಷಿಯ ನಿಮಿತ್ತ ನನ್ನ ಸ್ವಾತಂತ್ರ್ಯಕ್ಕೆ ಯಾಕೆ ತೀರ್ಪಾಗಬೇಕು?

10:30b.1CO.010.030 ನಾನು ಕೃಪೆಯಿಂದ ಪಾಲುಗಾರನಾಗಿ ಯಾವದಕ್ಕೋಸ್ಕರ ಕೃತಜ್ಞತೆಯನ್ನು ಸಲ್ಲಿಸುತ್ತೇನೋ ಅದರ ವಿಷಯದಲ್ಲಿ ನಾನು ಯಾಕೆ ದೂಷಿಸಲ್ಪಡಬೇಕು?

10:31b.1CO.010.031 ಆದದರಿಂದ ನೀವು ತಿಂದರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನು ದೇವರ ಮಹಿಮೆಗಾಗಿ ಮಾಡಿರಿ.

10:32b.1CO.010.032 ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ಅಭ್ಯಂತರವಾಗಬೇಡಿರಿ.ಇದಲ್ಲದೆ ನಾನಂತೂ ನನ್ನ ಸ್ವಪ್ರಯೊಜನವನ್ನೇ ನೋಡದೆ ಅನೇಕರು ರಕ್ಷಿಸಲ್ಪಡುವಂತೆ ಅವರ ಪ್ರಯೋಜನಕ್ಕಾಗಿ ಎಲ್ಲಾ ವಿಷಯಗಳಲ್ಲಿ ಎಲ್ಲರನ್ನು ಮೆಚ್ಚಿಸುತ್ತೇನೆ.

10:33b.1CO.010.033 ಇದಲ್ಲದೆ ನಾನಂತೂ ನನ್ನ ಸ್ವಪ್ರಯೊಜನವನ್ನೇ ನೋಡದೆ ಅನೇಕರು ರಕ್ಷಿಸಲ್ಪಡುವಂತೆ ಅವರ ಪ್ರಯೋಜನಕ್ಕಾಗಿ ಎಲ್ಲಾ ವಿಷಯಗಳಲ್ಲಿ ಎಲ್ಲರನ್ನು ಮೆಚ್ಚಿಸುತ್ತೇನೆ.

11

11:1b.1CO.011.001 ನಾನು ಕ್ರಿಸ್ತನನ್ನು ಅನುಸರಿಸುವಂತೆಯೇ ನೀವೂ ನನ್ನನ್ನು ಅನುಸರಿಸುವವರಾಗಿರ್ರಿ.

11:2b.1CO.011.002 ಸಹೋದರರೇ, ನೀವು ಎಲ್ಲಾದರಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಂಡು ನಾನು ನಿಮಗೆ ಒಪ್ಪಿಸಿಕೊಟ ಕಟ್ಟಳೆಗಳನ್ನು ಅನುಸರಿಸಿ ನಡೆಯುತ್ತೀರೆಂದು ನಿಮ್ಮನ್ನು ಹೊಗಳುತ್ತೇನೆ.

11:3b.1CO.011.003 ಕಟ್ಟಳೆಗಳನ್ನು ಅನುಸರಿಸಿ ನಡೆಯುತ್ತೀರೆಂದು ನಿಮ್ಮನ್ನು ಹೊಗಳುತ್ತೇನೆ.

11:4b.1CO.011.004 ಆದರೂ ಪ್ರತಿ ಪುರುಷನಿಗೂ ಕ್ರಿಸ್ತನು ತಲೆ, ಸ್ತ್ರೀಗೆ ಪುರುಷನು ತಲೆ, ಕ್ರಿಸ್ತನಿಗೆ ದೇವರು ತಲೆಯಾಗಿದ್ದಾನೆ ಎಂದು ನೀವು ತಿಳಿಯಬೇಕೆಂದು ನಾನು ಅಪೇಕ್ಷಿಸುತ್ತೇನೆ.

11:5b.1CO.011.005 ತಲೆಯನ್ನು ಮುಚ್ಚಿಕೊಂಡು ಪ್ರಾರ್ಥನೆಯನ್ನಾಗಲಿ ಪ್ರವಾದನೆಯನ್ನಾಗಲಿ ಮಾಡುವ ಪ್ರತಿಯೊಬ್ಬ ಪುರುಷನು ತನ್ನ ತಲೆಯನ್ನು ಅವಮಾನಪಡಿಸುತ್ತಾನೆ.

11:6b.1CO.011.006 ಆದರೆ ತಲೆಯಮೇಲೆ ಮುಸುಕು ಹಾಕಿಕೊಳ್ಳದೆ ಪ್ರಾರ್ಥನೆಯನ್ನಾಗಲಿ ಪ್ರವಾದನೆಯನ್ನಾಗಲಿ ಮಾಡುವ ಪ್ರತಿಯೊಬ್ಬ ಸ್ತ್ರೀಯು ತನ್ನ ತಲೆಯನ್ನು ಅವಮಾನಪಡಿಸುತ್ತಾಳೆ. ಯಾಕಂದರೆ ಸ್ತ್ರೀಯು ಮುಸುಕಿಲ್ಲದಿರುವದೂ ತಲೆಬೋಳಿಸಿ ಕೊಂಡಿರುವದೂ ಒಂದೇ.

11:7b.1CO.011.007 ಆದರೆ ಪುರುಷನು ದೇವರ ಪ್ರತಿರೂಪವೂ ಪ್ರಭಾವವೂ ಆಗಿರುವದರಿಂದ ತಲೆಯನ್ನು ಮುಚ್ಚಿ ಕೊಳ್ಳಕೂಡದು; ಸ್ತ್ರೀಯಾದರೋ ಪುರುಷನ ಪ್ರಭಾವ ವಾಗಿದ್ದಾಳೆ.

11:8b.1CO.011.008 ಪುರುಷನು ಸ್ತ್ರೀಯಿಂದ ನಿರ್ಮಿತ ನಾಗಲಿಲ್ಲ; ಸ್ತ್ರೀಯು ಪುರುಷನಿಂದ ನಿರ್ಮಿತವಾದಳು.

11:9b.1CO.011.009 ಇದಲ್ಲದೆ ಪುರುಷನು ಸ್ತ್ರೀಯ ನಿಮಿತ್ತವಾಗಿ ನಿರ್ಮಾಣವಾಗಲಿಲ್ಲ; ಆದರೆ ಸ್ತ್ರೀಯು ಪುರುಷನ ನಿಮಿತ್ತವಾಗಿ ನಿರ್ಮಾಣವಾದಳು.

11:10b.1CO.011.010 ಈ ಕಾರಣದಿಂದ ದೂತರ ನಿಮಿತ್ತವಾಗಿ ಸ್ತ್ರೀಗೆ ತನ್ನ ಶಿರಸ್ಸಿನ ಮೇಲೆ ಅಧಿಕಾರವಿರಬೇಕು.

11:11b.1CO.011.011 ಆದರೂ ಕರ್ತನಲ್ಲಿ ಸ್ತ್ರೀಯಿಲ್ಲದೆ ಪುರುಷನೂ ಪುರುಷನಿಲ್ಲದೆ ಸ್ತ್ರೀಯೂ ಇಲ್ಲ.

11:12b.1CO.011.012 ಸ್ತ್ರೀಯು ಪುರುಷನಿಂದ ಹೇಗೆ ಉತ್ಪತ್ತಿ ಯಾದಳೋ ಹಾಗೆಯೇ ಪುರುಷನೂ ಸ್ತ್ರೀ ಯಿಂದ ಉತ್ಪತ್ತಿಯಾದನು. ಸಮಸ್ತಕ್ಕೂ ದೇವರೇ ಮೂಲ ಕಾರಣನು.

11:13b.1CO.011.013 ನಿಮ್ಮೊಳಗೆ ನೀವೇ ತೀರ್ಪು ಮಾಡಿ ಕೊಳ್ಳಿರಿ; ಸ್ತ್ರೀಯು ಮುಸುಕು ಹಾಕಿಕೊಳ್ಳದೆ ದೇವರಿಗೆ ಪ್ರಾರ್ಥನೆ ಮಾಡುವದು ಯುಕ್ತವೋ?

11:14b.1CO.011.014 ಪುರುಷನು ಕೂದಲು ಬೆಳೆಸಿಕೊಂಡರೆ ಅದು ಅವನಿಗೆ ಅವಮಾನ ಕರವಾಗಿದೆಯೆಂದು ನಿಮಗೆ ಸ್ವಭಾವ ಸಿದ್ಧವಾಗಿ ತಿಳಿಯುತ್ತದಲ್ಲವೋ?

11:15b.1CO.011.015 ಆದರೆ ಸ್ತ್ರೀಯು ಕೂದಲು ಬೆಳೆಸಿಕೊಂಡರೆ ಅವಳಿಗೆ ಮುಸುಕಿಗೆ ಬದಲಾಗಿ ಕೊಡಲ್ಪಟ್ಟಿರುವದರಿಂದ ಅದು ಅವಳಿಗೆ ಗೌರವ ವಾಗಿದೆ;

11:16b.1CO.011.016 ಒಬ್ಬನು ವಾಗ್ವಾದ ಪ್ರಿಯನಾಗಿ ಕಾಣಿಸಿ ಕೊಂಡರೆ ಇಂಥ ಪದ್ಧತಿ ನಮ್ಮಲ್ಲಿಲ್ಲ, ದೇವರ ಸಭೆಗಳಲ್ಲಿಯೂ ಇಲ್ಲ ಎಂದು ತಿಳುಕೊಳ್ಳಲಿ.

11:17b.1CO.011.017 ನಾನು ಹೀಗೆ ನಿಮಗೆ ಅಪ್ಪಣೆಕೊಡುವಲ್ಲಿ ನಿಮ್ಮನ್ನು ಹೊಗಳುವದಿಲ್ಲ; ಯಾಕಂದರೆ ನೀವು ಕೂಡಿಬರು ವದರಿಂದ ಕೇಡಾಗುತ್ತದೆಯೇ ಹೊರತು ಮೇಲಾ ಗುವದಿಲ್ಲ.

11:18b.1CO.011.018 ಹೇಗಂದರೆ ಮೊದಲನೆಯದು ನೀವು ಸಭೆಯಾಗಿ ಕೂಡಿಬರುವಾಗ ನಿಮ್ಮಲ್ಲಿ ಭೇದಗಳು ಉಂಟಾಗುತ್ತವೆಂದು ಕೇಳುತ್ತೇನೆ; ಇದು ನಿಜವೆಂದು ಸ್ವಲ್ಪಮಟ್ಟಿಗೆ ನಂಬುತ್ತೇನೆ.

11:19b.1CO.011.019 ನಿಮ್ಮಲ್ಲಿಯೂ ಇಂಥಿಂಥ ವರು ಯೋಗ್ಯರೆಂದು ಕಾಣಬರುವಂತೆ ಭಿನ್ನಾಭಿಪ್ರಾಯ ಗಳು ಇರುವದು ಅವಶ್ಯವೇ.

11:20b.1CO.011.020 ಆದರೆ ನೀವು ಒಂದು ಸ್ಥಳದಲ್ಲಿ ಕೂಡಿಬರುವಾಗ ಮಾಡುವ ಭೋಜನವು ಕರ್ತನ ಭೋಜನವಲ್ಲ.

11:21b.1CO.011.021 ಭೋಜನವಾಗುವಲ್ಲಿ ಪ್ರತಿ ಯೊಬ್ಬನು ತನ್ನದನ್ನು ಮತ್ತೊಬ್ಬರಿಗಿಂತ ಮುಂದಾಗಿ ಊಟಮಾಡುತ್ತಾನೆ; ಹೀಗೆ ಒಬ್ಬನು ಹಸಿದಿರುತ್ತಾನೆ, ಮತ್ತೊಬ್ಬನು ಕುಡಿದು ಮತ್ತನಾಗಿರುತ್ತಾನೆ.

11:22b.1CO.011.022 ಏನು, ನೀವು ಉಣ್ಣುವದಕ್ಕೂ ಕುಡಿಯುವದಕ್ಕೂ ಮನೆಗಳಿಲ್ಲದೆ ಇದ್ದೀರಾ? ಅಥವಾ ದೇವರ ಸಭೆಯನ್ನು ಅಸಡ್ಡೆಮಾಡಿ ಏನೂ ಇಲ್ಲದವರನ್ನು ನಾಚಿಕೆಪಡಿಸುತ್ತೀರಾ? ನಾನು ನಿಮಗೇನು ಹೇಳಲಿ? ಈ ವಿಷಯದಲ್ಲಿ ನಾನು ನಿಮ್ಮನ್ನು ಹೊಗಳಲೋ? ಹೊಗಳುವದಿಲ್ಲ.

11:23b.1CO.011.023 ನಾನು ನಿಮಗೆ ಒಪ್ಪಿಸಿಕೊಟ್ಟ ಉಪದೇಶವನ್ನು ಕರ್ತನಿಂದ ಹೊಂದಿದೆನು. ಅದೇನಂದರೆ, ಕರ್ತನಾದ ಯೇಸು ತಾನು ಹಿಡಿದುಕೊಡಲ್ಪಟ್ಟ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು

11:24b.1CO.011.024 ಸ್ತ್ರೋತ್ರಮಾಡಿ ಅದನ್ನು ಮುರಿದು--ತೆಗೆದುಕೊಳ್ಳಿರಿ, ತಿನ್ನಿರಿ; ಇದು ನಿಮಗೋಸ್ಕರ ಮುರಿಯಲ್ಪಟ್ಟ ನನ್ನ ದೇಹ; ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಇದನ್ನು ಮಾಡಿರಿ ಅಂದನು.

11:25b.1CO.011.025 ಅದೇ ರೀತಿಯಾಗಿ ಊಟವಾದ ಮೇಲೆ ಆತನು ಪಾತ್ರೆಯನ್ನು ತೆಗೆದುಕೊಂಡು--ಈ ಪಾತ್ರೆಯು ನನ್ನ ರಕ್ತದಲ್ಲಿರುವ ಹೊಸಒಡಂಬಡಿಕೆ ಯಾಗಿದೆ; ನೀವು ಇದರಲ್ಲಿ ಪಾನಮಾಡುವಾಗೆಲ್ಲಾ ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಇದನ್ನು ಮಾಡಿರಿ ಅಂದನು.

11:26b.1CO.011.026 ನೀವು ಈ ರೊಟ್ಟಿಯನ್ನು ತಿಂದು ಈ ಪಾತ್ರೆಯಲ್ಲಿ ಪಾನಮಾಡುವಷ್ಟು ಸಾರಿ ಕರ್ತನ ಮರಣ ವನ್ನು ಆತನು ಬರುವ ತನಕ ಪ್ರಸಿದ್ಧಿಪಡಿಸುತ್ತೀರಿ.

11:27b.1CO.011.027 ಹೀಗಿರುವದರಿಂದ ಯಾವನಾದರೂ ಅಯೋಗ್ಯ ವಾಗಿ ಈ ರೊಟ್ಟಿಯನ್ನು ತಿಂದು ಕರ್ತನ ಪಾತ್ರೆಯಲ್ಲಿ ಪಾನಮಾಡಿದರೆ ಅವನು ಕರ್ತನ ದೇಹಕ್ಕೂ ರಕ್ತಕ್ಕೂ ಅಪರಾಧ ಮಾಡಿದವನಾಗಿರುವನು.

11:28b.1CO.011.028 ಆದರೆ ಒಬ್ಬನು ತನ್ನನ್ನು ಪರೀಕ್ಷಿಸಿಕೊಂಡವನಾಗಿ ಆ ರೊಟ್ಟಿಯಲ್ಲಿ ತಕ್ಕೊಂಡು ತಿನ್ನಲಿ, ಆ ಪಾತ್ರೆಯಲ್ಲಿ ಕುಡಿಯಲಿ.

11:29b.1CO.011.029 ಯಾಕಂದರೆ ಕರ್ತನ ದೇಹವೆಂದು ವಿವೇಚಿಸದೆ ಅಯೋಗ್ಯವಾಗಿ ತಿಂದು ಕುಡಿಯುವವನು ಹಾಗೆ ತಿಂದು ಕುಡಿಯುವದರಿಂದ ನ್ಯಾಯತೀರ್ಪಿಗೊಳ ಗಾಗುವನು.

11:30b.1CO.011.030 ಈ ಕಾರಣದಿಂದಲೇ ನಿಮ್ಮಲ್ಲಿ ಬಹು ಮಂದಿ ಬಲಹೀನರೂ ರೋಗಿಗಳೂ ಆಗಿದ್ದಾರೆ; ಅನೇಕರು ನಿದ್ರಿಸುತ್ತಾರೆ.

11:31b.1CO.011.031 ನಮ್ಮನ್ನು ನಾವೇ ವಿಚಾರಿಸಿ ಕೊಂಡರೆ ನ್ಯಾಯವಿಚಾರಣೆಗೊಳಗಾಗುವದಿಲ್ಲ.

11:32b.1CO.011.032 ಆದರೆ ನಾವು ನಮ್ಮನ್ನು ವಿಚಾರಿಸಿ ಕೊಂಡಾಗ ಲೋಕದವರ ಸಂಗಡ ನಮಗೆ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ಕರ್ತನು ನಮ್ಮನ್ನು ಶಿಕ್ಷಿಸುತ್ತಾನೆ.

11:33b.1CO.011.033 ಆದಕಾರಣ ನನ್ನ ಸಹೋದರರೇ, ಈ ಭೋಜನವನ್ನು ಮಾಡುವದಕ್ಕೆ ನೀವು ಕೂಡಿ ಬರುವಾಗ ಒಬ್ಬರನ್ನೊಬ್ಬರು ಕಾದುಕೊಳ್ಳಿರಿ.ಒಬ್ಬನು ಹಸಿದರೆ ಅವನು ಮನೆಯಲ್ಲೇ ಊಟ ಮಾಡಲಿ; ನೀವು ಕೂಡಿಬಂದದ್ದು ನ್ಯಾಯತೀರ್ಪಿಗೊಳಗಾಗು ವದಕ್ಕೆ ಕಾರಣವಾಗಬಾರದು. ಮಿಕ್ಕಾದ ಸಂಗತಿಗಳನ್ನು ನಾನು ಬಂದಾಗ ಕ್ರಮಪಡಿಸುತ್ತೇನೆ.

11:34b.1CO.011.034 ಒಬ್ಬನು ಹಸಿದರೆ ಅವನು ಮನೆಯಲ್ಲೇ ಊಟ ಮಾಡಲಿ; ನೀವು ಕೂಡಿಬಂದದ್ದು ನ್ಯಾಯತೀರ್ಪಿಗೊಳಗಾಗು ವದಕ್ಕೆ ಕಾರಣವಾಗಬಾರದು. ಮಿಕ್ಕಾದ ಸಂಗತಿಗಳನ್ನು ನಾನು ಬಂದಾಗ ಕ್ರಮಪಡಿಸುತ್ತೇನೆ.

12

12:1b.1CO.012.001 ಸಹೋದರರೇ, ಆತ್ಮಿಕ ವರಗಳನ್ನು ಕುರಿತು ನಿಮಗೆ ತಿಳಿಯದಿರಬಾರದೆಂದು ನಾನು ಅಪೇಕ್ಷಿಸುತ್ತೇನೆ.

12:2b.1CO.012.002 ನೀವು ಅನ್ಯರಾಗಿದ್ದಾಗ ನಿಮಗೆ ಪ್ರೇರಣೆಯಾದ ಹಾಗೆ ಮೂಕವಿಗ್ರಹಗಳ ಬಳಿಗೆ ಹೋಗುತ್ತಿದ್ದಿರೆಂದು ಬಲ್ಲಿರಿ.

12:3b.1CO.012.003 ಹೀಗಿರುವದರಿಂದ ನಾನು ನಿಮಗೆ ತಿಳಿಸುವದೇನಂದರೆ, ದೇವರಾತ್ಮನಿಂದ ಮಾತನಾಡುವ ಯಾವ ಮನುಷ್ಯನಾದರೂ ಯೇಸು ವನ್ನು ಶಾಪಗ್ರಸ್ತನೆಂದು ಹೇಳುವದಿಲ್ಲ; ಪವಿತ್ರಾತ್ಮ ನಿಂದಲೇ ಹೊರತು ಯಾವ ಮನುಷ್ಯನಾದರೂ ಯೇಸುವನ್ನು ಕರ್ತನೆಂದು ಹೇಳಲಾರನು.

12:4b.1CO.012.004 ವರಗಳಲ್ಲಿ ಬೇರೆ ಬೇರೆ ವಿಧಗಳುಂಟು. ಆದರೆ ಆತ್ಮನು ಒಬ್ಬನೇ;

12:5b.1CO.012.005 ಸೇವೆಗಳಲ್ಲಿ ಬೇರೆ ಬೇರೆ ವಿಧ ಗಳುಂಟು, ಆದರೆ ಕರ್ತನು ಒಬ್ಬನೇ;

12:6b.1CO.012.006 ಾರ್ಯಗಳಲ್ಲಿ ಬೇರೆ ಬೇರೆ ವಿಧಗಳುಂಟು, ಆದರೆ ಸರ್ವರಲ್ಲಿಯೂ ಸರ್ವಕಾರ್ಯಗಳನ್ನು ಸಾಧಿಸುವ ದೇವರು ಒಬ್ಬನೇ.

12:7b.1CO.012.007 ಆದರೆ ಪವಿತ್ರಾತ್ಮನ ಪ್ರಕಟನೆಯು ಪ್ರತಿಯೊಬ್ಬನ ಪ್ರಯೋಜನಕ್ಕಾಗಿ ಕೊಡಲ್ಪಟ್ಟಿದೆ.

12:8b.1CO.012.008 ಹೇಗಂದರೆ ಒಬ್ಬನಿಗೆ ಆತ್ಮನ ಮೂಲಕ ಜ್ಞಾನವಾಕ್ಯವು, ಒಬ್ಬನಿಗೆ ಅದೇ ಆತ್ಮನಿಗೆ ಅನುಗುಣವಾಗಿ ತಿಳುವಳಿಕೆಯ ವಾಕ್ಯವು,

12:9b.1CO.012.009 ಬೇರೊಬ್ಬನಿಗೆ ಆ ಆತ್ಮನಿಂದಲೇ ನಂಬಿಕೆಯು, ಮತ್ತೊಬ್ಬನಿಗೆ ಆ ಆತ್ಮನಿಂದಲೇ ರೋಗ ಗಳನ್ನು ವಾಸಿಮಾಡುವ ವರಗಳು,

12:10b.1CO.012.010 ಒಬ್ಬನಿಗೆ ಮಹತುಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಮತ್ತೊಬ್ಬನಿಗೆ ಆತ್ಮಗಳನ್ನು ವಿವೇಚಿಸುವ ವರವು, ಇನ್ನೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಮತ್ತೊಬ್ಬನಿಗೆ ಭಾಷೆಗಳ ಅರ್ಥವನ್ನು ಹೇಳುವ ವರವು ಕೊಡಲ್ಪಡುತ್ತದೆ.

12:11b.1CO.012.011 ಆದರೆ ಈ ಎಲ್ಲಾ ಕಾರ್ಯ ಗಳನ್ನು ಮಾಡುವ ಆ ಒಬ್ಬ ಆತ್ಮನೇ ತನ್ನ ಚಿತ್ತಾನು ಸಾರವಾಗಿ ಒಬ್ಬೊಬ್ಬನಿಗೆ ಹಂಚಿಕೊಡುತ್ತಾನೆ.

12:12b.1CO.012.012 ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ಆ ದೇಹದ ಅಂಗಗಳೆಲ್ಲವು ಅನೇಕವಾಗಿದ್ದು ಒಂದೇ ದೇಹವಾಗಿ ರುವದೋ, ಹಾಗೆಯೇ ಕ್ರಿಸ್ತನು ಇದ್ದಾನೆ.

12:13b.1CO.012.013 ಯೆಹೂದ್ಯರಾಗಲಿ ಅನ್ಯರಾಗಲಿ ದಾಸರಾಗಲಿ ಸ್ವತಂತ್ರರಾಗಲಿ ನಾವೆಲ್ಲರು ಒಂದೇ ದೇಹವಾಗು ವದಕ್ಕಾಗಿ ಒಬ್ಬನೇ ಆತ್ಮನಿಂದ ಬಾಪ್ತಿಸ್ಮ ಮಾಡಿಸಿ ಕೊಂಡೆವು; ಆ ಒಬ್ಬನೇ ಆತ್ಮನು ನಮ್ಮೆಲ್ಲರಿಗೂ ಪಾನವಾಗಿ ಕೊಡಲ್ಪಟ್ಟಿದ್ದಾನೆ.

12:14b.1CO.012.014 ದೇಹವು ಒಂದೇ ಅಂಗವಲ್ಲ, ಆದರೆ ಅದು ಅನೇಕ ಅಂಗಗಳುಳ್ಳದ್ದಾಗಿದೆ.

12:15b.1CO.012.015 ಕಾಲು--ನಾನು ಕೈಯಲ್ಲದ ಕಾರಣ ದೇಹಕ್ಕೆ ಸೇರಲಿಲ್ಲವೆಂದು ಹೇಳಿದರೂ ಅದು ದೇಹಕ್ಕೆ ಸೇರದೆ ಇರುವದೋ?

12:16b.1CO.012.016 ಕಿವಿ--ನಾನು ಕಣ್ಣಲ್ಲದ ಕಾರಣ ದೇಹಕ್ಕೆ ಸೇರಲಿಲ್ಲವೆಂದು ಹೇಳಿದರೂ ಅದು ದೇಹಕ್ಕೆ ಸೇರದೆ ಇರುವದೋ?

12:17b.1CO.012.017 ದೇಹವೆಲ್ಲಾ ಕಣ್ಣಾದರೆ ಕೇಳುವದೆಲ್ಲಿ? ಅದೆಲ್ಲಾ ಕೇಳುವದಾದರೆ ಮೂಸಿ ನೋಡುವದೆಲ್ಲಿ?

12:18b.1CO.012.018 ಆದರೆ ದೇವರು ಆ ಅಂಗಗಳಲ್ಲಿ ಪ್ರತಿಯೊಂದನ್ನು ತನ್ನ ಇಷ್ಟಾನುಸಾರವಾಗಿ ದೇಹದಲ್ಲಿ ಇಟ್ಟಿದ್ದಾನೆ.

12:19b.1CO.012.019 ಅವೆಲ್ಲವೂ ಒಂದೇ ಅಂಗವಾಗಿದ್ದರೆ ದೇಹವೆಲ್ಲಿರುವದು?

12:20b.1CO.012.020 ಆದರೆ ಅಂಗಗಳೇನೋ ಅನೇಕ, ದೇಹವು ಒಂದೇ.

12:21b.1CO.012.021 ಕಣ್ಣು ಕೈಗೆ--ನೀನು ನನಗೆ ಅವಶ್ಯವಿಲ್ಲವೆಂದೂ ತಲೆಯು ಕಾಲು ಗಳಿಗೆ--ನೀವು ನನಗೆ ಅವಶ್ಯವಿಲ್ಲವೆಂದೂ ಹೇಳುವದ ಕ್ಕಾಗುವದಿಲ್ಲ.

12:22b.1CO.012.022 ಹೌದು, ಶರೀರದ ಅಂಗಗಳು ಬಹಳ ಬಲಹೀನವಾದವುಗಳೆಂದು ಕಂಡರೂ ಹೆಚ್ಚಾಗಿ ಅವಶ್ಯ ವಾಗಿವೆ.

12:23b.1CO.012.023 ಇದಲ್ಲದೆ ಅಲ್ಪ ಮಾನವುಳ್ಳವುಗಳೆಂದು ನಾವು ಎಣಿಸುವ ದೇಹದ ಅಂಗಗಳಿಗೆ ಹೆಚ್ಚಾದ ಗೌರವವನ್ನು ಕೊಡುತ್ತೇವೆ. ಆಗ ಅಂದವಿಲ್ಲದ ನಮ್ಮ ಅಂಗಗಳು ಹೆಚ್ಚು ಅಂದವಾಗಿರುತ್ತವೆ.

12:24b.1CO.012.024 ಅಂದವುಳ್ಳ ನಮ್ಮ ಅಂಗಗಳಿಗೆ ಯಾವ ಅವಶ್ಯಕತೆಯೂ ಇರುವದಿಲ್ಲ; ಆದರೆ ದೇವರು ಕೊರತೆಯುಳ್ಳ ಅಂಗ ವನ್ನು ಹೆಚ್ಚಾಗಿ ಗೌರವಿಸಿ ದೇಹವನ್ನು ಹದವಾಗಿ ಜೋಡಿಸಿದ್ದಾನೆ.

12:25b.1CO.012.025 ಹೀಗೆ ದೇಹದಲ್ಲಿ ಭೇದವಿರದೆ ಅಂಗಗಳು ಒಂದಕ್ಕೊಂದು ಚಿಂತಿಸುವವುಗಳಾಗಿ ರುತ್ತವೆ.

12:26b.1CO.012.026 ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ; ಇಲ್ಲವೆ ಒಂದು ಅಂಗಕ್ಕೆ ಮರ್ಯಾದೆ ಬಂದರೆ ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ.

12:27b.1CO.012.027 ಈಗ ನೀವು ಕ್ರಿಸ್ತನ ದೇಹವಾಗಿದ್ದು ವಿಶೇಷ ವಾಗಿ ಅಂಗಗಳಾಗಿದ್ದೀರಿ.

12:28b.1CO.012.028 ದೇವರು ಕೆಲವರನ್ನು ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಉಪದೇಶಕರನ್ನು ಇಟ್ಟಿದ್ದಾನೆ; ಆಮೇಲೆ ಮಹತ್ಕಾರ್ಯ ಗಳನ್ನೂ ವಾಸಿಮಾಡುವ ವರಗಳನ್ನೂ ಸಹಾಯ ಮಾಡುವದನ್ನೂ ಕಾರ್ಯಗಳನ್ನು ನಿರ್ವಹಿಸುವದನ್ನೂ ವಿವಿಧ ಭಾಷೆಗಳನಾ

12:29b.1CO.012.029 ಎಲ್ಲರೂ ಅಪೊಸ್ತಲರೋ? ಎಲ್ಲರೂ ಪ್ರವಾದಿ ಗಳೋ? ಎಲ್ಲರೂ ಉಪದೇಶಕರೋ? ಎಲ್ಲರೂ ಮಹತ್ಕಾರ್ಯಗಳನ್ನು ಮಾಡುವವರೋ?

12:30b.1CO.012.030 ವಾಸಿ ಮಾಡುವ ವರಗಳು ಎಲ್ಲರಿಗೂ ಉಂಟೋ? ಎಲ್ಲರೂ ಭಾಷೆಗಳನ್ನಾಡುವರೋ? ಭಾಷೆಗಳ ಅರ್ಥವನ್ನು ಎಲ್ಲರೂ ಹೇಳುವರೋ?ಆದರೆ ಶ್ರೇಷ್ಠ ವರಗಳನ್ನು ಆಸಕ್ತಿಯಿಂದ ಅಪೇಕ್ಷಿಸಿರಿ. ಆದಾಗ್ಯೂ ನಾನು ನಿಮಗೆ ಉತ್ಕೃಷ್ಟವಾದ ಮಾರ್ಗವನ್ನು ತೋರಿಸುತ್ತೇನೆ.

12:31b.1CO.012.031 ಆದರೆ ಶ್ರೇಷ್ಠ ವರಗಳನ್ನು ಆಸಕ್ತಿಯಿಂದ ಅಪೇಕ್ಷಿಸಿರಿ. ಆದಾಗ್ಯೂ ನಾನು ನಿಮಗೆ ಉತ್ಕೃಷ್ಟವಾದ ಮಾರ್ಗವನ್ನು ತೋರಿಸುತ್ತೇನೆ.

13

13:1b.1CO.013.001 ನಾನು ಮನುಷ್ಯರ ಮತ್ತು ದೂತರ ಭಾಷೆಗಳನ್ನು ಆಡುವವನಾದರೂ ಪ್ರೀತಿ ಯಿಲ್ಲದವನಾಗಿದ್ದರೆ ನಾದಕೊಡುವ ಕಂಚೂ ಗಣಗಣಿ ಸುವ ತಾಳವೂ ಆಗಿದ್ದೇನೆ.

13:2b.1CO.013.002 ನನಗೆ ಪ್ರವಾದನ ವರವಿದ್ದರೂ ಎಲ್ಲಾ ರಹಸ್ಯಗಳನ್ನು ಮತ್ತು ಸಕಲ ಜ್ಞಾನವನ್ನು ತಿಳಿದುಕೊಂಡವನಾಗಿದ್ದರೂ ಬೆಟ್ಟಗಳನ್ನು ತೆಗೆದಿಡುವದಕ್ಕೆ ಬೇಕಾದಷ್ಟು ನಂಬಿಕೆಯಿದ್ದರೂ ನಾನು ಪ್ರೀತಿಯಿಲ್ಲದವನಾಗಿದ್ದರೆ ಏನೂ ಅಲ್ಲದವನಾಗಿ ದ್ದೇನೆ.

13:3b.1CO.013.003 ನನಗಿರುವದೆಲ್ಲವನ್ನು ಬಡವರಿಗೆ ಅನ್ನದಾನ ಮಾಡಿದರೂ ನನ್ನ ದೇಹವನ್ನು ಸುಡುವದಕ್ಕೆ ಒಪ್ಪಿ ಸಿದರೂ ಪ್ರೀತಿಯು ನನಗಿಲ್ಲದಿದ್ದರೆ ನನಗೇನೂ ಪ್ರಯೋಜನವಾಗುವದಿಲ್ಲ.

13:4b.1CO.013.004 ಪ್ರೀತಿ ಬಹು ತಾಳ್ಮೆಯುಳ್ಳದ್ದು, ಕರುಣೆಯುಳ್ಳದ್ದು; ಪ್ರೀತಿಯು ಹೊಟ್ಟೇಕಿಚ್ಚು ಪಡುವದಿಲ್ಲ, ಹೊಗಳಿ ಕೊಳ್ಳುವದಿಲ್ಲ, ಉಬ್ಬಿಕೊಳ್ಳುವದಿಲ್ಲ,

13:5b.1CO.013.005 ಮರ್ಯಾದೆ ಗೆಟ್ಟು ನಡೆಯುವದಿಲ್ಲ, ಸ್ವಾರ್ಥತೆಯನ್ನು ಬಯಸು ವದಿಲ್ಲ, ಬೇಗನೆ ಕೋಪಗೊಳ್ಳುವದಿಲ್ಲ, ಕೆಟ್ಟದ್ದನ್ನು ಯೋಚಿಸುವದಿಲ್ಲ.

13:6b.1CO.013.006 ಅನ್ಯಾಯದಲ್ಲಿ ಸಂತೋಷಪಡದೆ ಸತ್ಯದಲ್ಲಿಯೇ ಸಂತೋಷಪಡುತ್ತದೆ.

13:7b.1CO.013.007 ಎಲ್ಲವನ್ನೂ ಸಹಿಸಿಕೊಳ್ಳುತ್ತದೆ, ಎಲ್ಲವನ್ನೂ ನಂಬುತ್ತದೆ, ಎಲ್ಲವನ್ನೂ ನಿರೀಕ್ಷಿಸುತ್ತದೆ, ಎಲ್ಲವನ್ನೂ ತಾಳಿಕೊಳ್ಳುತ್ತದೆ.

13:8b.1CO.013.008 ಪ್ರೀತಿಯು ಎಂದಿಗೂ ಬಿದ್ದು ಹೋಗುವದಿಲ್ಲ;ಆದರೆ ಪ್ರವಾದನೆಗಳು ಬಿದ್ದುಹೋಗುವವು; ಭಾಷೆ ಗಳೋ ನಿಂತುಹೋಗುವವು: ಜ್ಞಾನವೋ ಇಲ್ಲದಂತಾ ಗುವದು.

13:9b.1CO.013.009 ನಾವು ಅಪೂರ್ಣವಾಗಿ ತಿಳುಕೊಳ್ಳುತ್ತೇವೆ, ಅಪೂರ್ಣವಾಗಿ ಪ್ರವಾದಿಸುತ್ತೇವೆ.

13:10b.1CO.013.010 ಆದರೆ ಸಂಪೂರ್ಣವಾದದ್ದು ಬಂದಾಗ ಅಪೂರ್ಣವಾದದ್ದು ಇಲ್ಲದಂತಾಗುವದು.

13:11b.1CO.013.011 ನಾನು ಬಾಲಕನಾಗಿದ್ದಾಗ ಬಾಲಕನ ಹಾಗೆ ಮಾತನಾಡಿದೆನು; ಬಾಲಕನ ಹಾಗೆ ತಿಳಿದುಕೊಂಡೆನು. ಬಾಲಕನ ಹಾಗೆ ಯೋಚಿಸಿದೆನು. ಆದರೆ ನಾನು ಪ್ರಾಯಸ್ಥನಾದ ಮೇಲೆ ಬಾಲ್ಯದವು ಗಳನ್ನು ಬಿಟ್ಟುಬಿಟ್ಟೆನು.

13:12b.1CO.013.012 ಈಗ ನಾವು ಕನ್ನಡಿಯಲ್ಲಿ ಮೊಬ್ಬಾಗಿ ನೋಡುತ್ತೇವೆ. ತರುವಾಯ ಮುಖಾಮುಖಿ ಯಾಗಿ ನೋಡುವೆವು; ಈಗ ನಾನು ಅಪೂರ್ಣವಾಗಿ ತಿಳಿದಿದ್ದೇನೆ. ತರುವಾಯ ದೇವರು ನನ್ನನ್ನು ತಿಳಿದು ಕೊಂಡಂತೆಯೇ ನಾನೂ ತಿಳಿದುಕೊಳ್ಳುತ್ತೇನೆ.ಹೀಗೆ ನಂಬಿಕೆ ನಿರೀಕ್ಷೆ ಪ್ರೀತಿ ಈ ಮೂರೇ ನಿಲ್ಲುತ್ತವೆ; ಆದರೆ ಇವುಗಳಲ್ಲಿ ದೊಡ್ಡದು ಪ್ರೀತಿಯೇ.

13:13b.1CO.013.013 ಹೀಗೆ ನಂಬಿಕೆ ನಿರೀಕ್ಷೆ ಪ್ರೀತಿ ಈ ಮೂರೇ ನಿಲ್ಲುತ್ತವೆ; ಆದರೆ ಇವುಗಳಲ್ಲಿ ದೊಡ್ಡದು ಪ್ರೀತಿಯೇ.

14

14:1b.1CO.014.001 ಪ್ರೀತಿಯನ್ನು ಅನುಸರಿಸಿರಿ; ಆದರೂ ಆತ್ಮಿಕ ವರಗಳನ್ನು, ಅದರಲ್ಲೂ ಪ್ರವಾದಿಸುವ ದನ್ನೇ ಅಪೇಕ್ಷಿಸಿರಿ.

14:2b.1CO.014.002 ಭಾಷೆಯನ್ನಾಡುವವನು ದೇವರ ಸಂಗಡಲೇ ಹೊರತು ಮನುಷ್ಯರ ಸಂಗಡ ಮಾತನಾಡು ವದಿಲ್ಲ. ಅವನು ಆತ್ಮನಲ್ಲಿದ್ದು ರಹಸ್ಯಗಳನ್ನು ನುಡಿ ಯುತ್ತಿದ್ದರೂ ಯಾರೂ ಅವನನ್ನು ತಿಳುಕೊಳ್ಳುವದಿಲ್ಲ.

14:3b.1CO.014.003 ಪ್ರವಾದಿಸುವವನಾದರೋ ಮನುಷ್ಯರ ಸಂಗಡ ಮಾತನಾಡುವವನಾಗಿ ಅವರಿಗೆ ಭಕ್ತಿವೃದ್ಧಿಯನ್ನೂ ಪ್ರೋತ್ಸಾಹವನ್ನೂ ಸಂತೈಸುವಿಕೆಯನ್ನೂ ಉಂಟು ಮಾಡುತ್ತಾನೆ.

14:4b.1CO.014.004 ಭಾಷೆಯನ್ನಾಡುವವನು ತನಗೆ ಮಾತ್ರ ಭಕ್ತಿವೃದ್ಧಿಯನ್ನುಂಟು ಮಾಡಿಕೊಳ್ಳುತ್ತಾನೆ. ಪ್ರವಾದಿಸು ವವನಾದರೋ ಸಭೆಗೆ ಭಕ್ತಿವೃದ್ಧಿಯನ್ನುಂಟು ಮಾಡು ತ್ತಾನೆ.

14:5b.1CO.014.005 ನೀವೆಲ್ಲರೂ ಭಾಷೆಗಳನ್ನಾಡಬೇಕೆಂದು ನಾನು ಅಪೇಕ್ಷಿಸುತ್ತೇನೆ; ಆದರೆ ಅದಕ್ಕಿಂತಲೂ ನೀವು ಪ್ರವಾದಿಸಬೇಕೆಂಬದೇ ನನ್ನಿಷ್ಟ. ಭಾಷೆಗಳನ್ನಾಡು ವವನು ಸಭೆಗೆ ಭಕ್ತಿವೃದ್ಧಿಯಾಗುವದಕ್ಕಾಗಿ ಆ ಭಾಷೆಯ ಅರ್ಥವನ್ನು ಹೇಳದೆ ಹೋದರೆ ಅವನಿಗಿಂತ ಪ್ರವಾದಿಸುವವನು ಶ್ರೇಷ್ಠ.

14:6b.1CO.014.006 ಹೀಗಿರುವದರಿಂದ ಸಹೋದರರೇ, ನಾನು ನಿಮ್ಮ ಬಳಿಗೆ ಬಂದು ಪ್ರಕಟ ವಾದದ್ದರಿಂದಾಗಲಿ ಇಲ್ಲವೆ ಜ್ಞಾನದಿಂದಾಗಲಿ ಇಲ್ಲವೆ ಪ್ರವಾದನೆಯಿಂದಾಗಲಿ ಇಲ್ಲವೆ ಬೋಧನೆಯಿಂದಾ ಗಲಿ ಮಾತನಾಡದೆ ಭಾಷೆಗಳಿಂದ ಮಾತ್ರ ಮಾತನಾಡಿ ದರೆ ನನ್ನಿಂದ ನಿಮಗೇನು ಪ್ರಯೋಜನ?

14:7b.1CO.014.007 ಕೊಳಲು ವೀಣೆ ಮೊದಲಾದ ಅಚೇತನವಾದ್ಯಗಳು ಸ್ವರಗಳಲಿ ಯಾವ ಭೇದವನ್ನೂ ತೋರಿಸದಿದ್ದರೆ ಊದಿದ್ದು ಅಥವಾ ಬಾರಿಸಿದ್ದು ತಿಳಿಯುವದು ಹೇಗೆ?

14:8b.1CO.014.008 ತುತೂರಿಯು ಗೊತ್ತಿಲ್ಲದ ಶಬ್ದವನ್ನು ಕೊಟ್ಟರೆ ತನ್ನನ್ನು ಯುದ್ಧಕ್ಕೆ ಸಿದ್ಧಮಾಡಿಕೊಳ್ಳುವವನು ಯಾರು?

14:9b.1CO.014.009 ಹಾಗೆಯೇ ನೀವು ಸುಲಭವಾಗಿ ತಿಳಿಯಬಹುದಾದ ಮಾತುಗಳನ್ನಾಡದೆ ಹೋದರೆ ಮಾತನಾಡಿದ್ದು ಏನೆಂದು ಹೇಗೆ ತಿಳಿದೀತು? ನೀವು ಗಾಳಿಯಲ್ಲಿ ಮಾತನಾಡಿದ ಹಾಗಿರುವದಷ್ಟೆ.

14:10b.1CO.014.010 ಲೋಕದಲ್ಲಿ ಅನೇಕ ವಿಧವಾದ ಸ್ವರಗಳು ಇದ್ದರೂ ಇರಬಹುದು; ಆದರೆ ಅವುಗಳಲ್ಲಿ ಅರ್ಥವಿಲ್ಲದ್ದು ಒಂದಾದರೂ ಇಲ್ಲ.

14:11b.1CO.014.011 ಆದದರಿಂದ ಭಾಷೆಯ ಅರ್ಥವು ನನಗೆ ಗೊತ್ತಿಲ್ಲ ದಿದ್ದರೆ ಮಾತನಾಡುವವನಿಗೆ ನಾನು ಅನ್ಯದೇಶ ದವನಂತಿರುವೆನು; ಮಾತನಾಡುವವನು ನನಗೆ ಅನ್ಯ ದೇಶದವನಂತಿರುವನು.

14:12b.1CO.014.012 ಅದರಂತೆಯೇ ನೀವು ಆತ್ಮಿಕ ವರಗಳಲ್ಲಿ ಆಸಕ್ತಿಯುಳ್ಳವರಾಗಿರುವದರಿಂದ ಸಭೆಯ ಹೆಚ್ಚಿನ ಭಕ್ತಿವೃದ್ಧಿಗಾಗಿ ತವಕಪಡಿರಿ.

14:13b.1CO.014.013 ಆದದರಿಂದ ಅನ್ಯಭಾಷೆಯಲ್ಲಿ ಮಾತನಾಡುವವನು ಅದರ ಅರ್ಥ ಹೇಳುವಂತೆ ಪ್ರಾರ್ಥಿಸಲಿ.

14:14b.1CO.014.014 ಅನ್ಯಭಾಷೆಯಲ್ಲಿ ನಾನು ಪ್ರಾರ್ಥಿಸಿದರೆ ನನ್ನ ಆತ್ಮವು ಪ್ರಾರ್ಥಿಸುವದು; ಆದರೆ ನನ್ನ ತಿಳುವಳಿಕೆಯು ನಿಷ್ಪಲವಾಗಿರುವದು.

14:15b.1CO.014.015 ಹಾಗಾದ ರೇನು? ನಾನು ಆತ್ಮದಿಂದ ಪ್ರಾರ್ಥಿಸುವೆನು, ಬುದ್ಧಿ ಯಿಂದಲೂ ಪ್ರಾರ್ಥಿಸುವೆನು; ಆತ್ಮದಿಂದ ಹಾಡು ವೆನು, ಬುದ್ಧಿಯಿಂದಲೂ ಹಾಡುವೆನು.

14:16b.1CO.014.016 ಇದಲ್ಲದೆ ನೀನು ಆತ್ಮದಿಂದ ಸ್ತೋತ್ರ ಮಾಡುವಾಗ ತಿಳುವಳಿಕೆ ಯಿಲ್ಲದವನು ನೀನು ಮಾಡುವ ಕೃತಜ್ಞತಾಸ್ತುತಿಯನ್ನು ತಿಳಿಯದೆ ಇರುವದರಿಂದ ನೀನು ಹೇಳುವದಕ್ಕೆ ಆಮೆನ್‌ ಎಂದು ಹೇಳುವದು ಹೇಗೆ?

14:17b.1CO.014.017 ನೀನಂತೂ ನಿಜ ವಾಗಿಯೂ ಚೆನ್ನಾಗಿ ಕೃತಜ್ಞತಾಸ್ತುತಿ ಮಾಡುತ್ತೀ; ಆದರೆ ಬೇರೊಬ್ಬನು ಭಕ್ತಿವೃದ್ದಿ ಹೊಂದುವದಿಲ್ಲ.

14:18b.1CO.014.018 ನಾನು ನಿಮ್ಮೆಲ್ಲರಿಗಿಂತಲೂ ಹೆಚ್ಚಾಗಿ ಭಾಷೆಗಳನ್ನಾಡುತ್ತೇನೆಂದು ನನ್ನ ದೇವರನ್ನು ಕೊಂಡಾಡುತ್ತೇನೆ.

14:19b.1CO.014.019 ಆದರೂ ಸಭೆಯಲ್ಲಿ ಅನ್ಯಭಾಷೆಯಿಂದ ಹತ್ತುಸಾವಿರ ಮಾತು ಗಳನ್ನಾಡುವದಕ್ಕಿಂತ ನನ್ನ ಬುದ್ಧಿಯಿಂದ ಐದೇ ಮಾತು ಗಳನ್ನಾಡಿ ಇತರರಿಗೆ ಉಪದೇಶಮಾಡುವದು ನನಗೆ ಇಷ್ಟವಾದದ್ದು.

14:20b.1CO.014.020 ಸಹೋದರರೇ, ಬುದ್ಧಿಯ ವಿಷಯ ದಲ್ಲಿ ಬಾಲಕರಾಗಿರಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಾಗಿಯೇ ಇದ್ದು ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಬೇಕು.

14:21b.1CO.014.021 ಬೇರೆ ಭಾಷೆಯವರ ಮೂಲಕವಾಗಿಯೂ ಬೇರೆ ಯವರ ತುಟಿಗಳಿಂದಲೂ ನಾನು ಈ ಜನರೊಂದಿಗೆ ಮಾತನಾಡುವೆನು; ಆದರೂ ಅವರು ನನ್ನ ಮಾತಿಗೆ ಕಿವಿಗೊಡುವದಿಲ್ಲ ಎಂದು ಕರ್ತನು ಹೇಳುತ್ತಾನೆಂಬ ದಾಗಿ ನ್ಯಾಯಪ್ರಮಾಣದಲ್ಲಿ ಬರೆದದೆ.

14:22b.1CO.014.022 ಆದದ ರಿಂದ ಭಾಷೆಗಳು ನಂಬುವವರಿಗೆ ಅಲ್ಲ, ನಂಬದವರಿಗೆ ಸೂಚನೆಯಾಗಿವೆ; ಆದರೆ ಪ್ರವಾದಿಸುವದು ನಂಬದ ವರಿಗಲ್ಲ, ನಂಬುವವರಿಗೆ ಸೂಚನೆಯಾಗಿದೆ.

14:23b.1CO.014.023 ಆದ ಕಾರಣ ಸಭೆಯೆಲ್ಲವೂ ಒಂದು ಸ್ಥಳದಲ್ಲಿ ಕೂಡಿ ಬಂದಾಗ ಎಲ್ಲರೂ ಭಾಷೆಗಳನ್ನಾಡುವದಾದರೆ ತಿಳುವಳಿಕೆ ಯಿಲ್ಲದವರು ಇಲ್ಲವೆ ಅವಿಶ್ವಾಸಿಗಳು ಒಳಗೆ ಬಂದು ನೀವು ಹುಚ್ಚರಾಗಿದ್ದೀರೆಂದು ಹೇಳುವದಿಲ್ಲವೇ?

14:24b.1CO.014.024 ಆದರೆ ಎಲ್ಲರೂ ಪ್ರವಾದಿಸುವಾಗ ಒಬ್ಬ ಅವಿಶ್ವಾಸಿ ಯಾಗಲಿ ಇಲ್ಲವೆ ತಿಳುವಳಿಕೆಯಿಲ್ಲದವನಾಗಲಿ ಒಳಗೆ ಬಂದರೆ ಅವನು ಎಲ್ಲರಿಂದ ಅರುಹು ಹೊಂದುತ್ತಾನೆ, ಎಲ್ಲರಿಂದ ಪರಿಶೋಧಿತನಾಗುತ್ತಾನೆ.

14:25b.1CO.014.025 ಹೀಗೆ ಅವನ ಹೃದಯದ ರಹಸ್ಯಗಳು ತೋರಿಬರುತ್ತವೆ; ಅವನು ಸಾಷ್ಟಾಂಗವೆರಗಿ ದೇವರನ್ನು ಆರಾಧಿಸಿ ನಿಜಕ್ಕೂ ನಿಮ್ಮಲ್ಲಿ ದೇವರಿದ್ದಾನೆಂದು ಹೇಳುವನು.

14:26b.1CO.014.026 ಹಾಗಾದರೇನು? ಸಹೋದರರೇ, ನೀವು ಕೂಡಿ ಬಂದಾಗ ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಕೀರ್ತನೆಯಾಗಲಿ, ಬೋಧನೆಯಾಗಲಿ, ಭಾಷೆಯಾಗಲಿ, ಪ್ರಕಟನೆಯಾ ಗಲಿ ಭಾಷೆಯ ಅರ್ಥ ಹೇಳುವದಾಗಲಿ ಇರುತ್ತದಷ್ಟೆ. ಎಲ್ಲವುಗಳು ಭಕ್ತವೃದ್ಧಿಗಾಗಿಯೇ ನಡೆಯಲಿ.

14:27b.1CO.014.027 ಯಾವ ನಾದರೂ ಅನ್ಯಭಾಷೆಯನ್ನಾಡುವದಾದರೆ ಇಬ್ಬರು ಅಥವಾ ಮೂವರಿಗಿಂತ ಹೆಚ್ಚಿಲ್ಲದೆ ಒಬ್ಬೊಬ್ಬರಾಗಿ ಮಾತನಾಡಬೇಕು; ಒಬ್ಬನು ಅರ್ಥವನ್ನು ಹೇಳಲಿ;

14:28b.1CO.014.028 ಅರ್ಥವನ್ನು ಹೇಳುವವನಿಲ್ಲದಿದ್ದರೆ ಅವನು (ಭಾಷೆ ಯನ್ನಾಡುವವನು) ಸಭೆಯಲ್ಲಿ ಮೌನವಾಗಿರಲಿ; ಅವನು ತನ್ನೊಂದಿಗೆಯೂ ದೇವರೊಂದಿಗೆಯೂ ಮಾತನಾಡಿಕೊಳ್ಳಲಿ.

14:29b.1CO.014.029 ಪ್ರವಾದಿಗಳು ಇಬ್ಬರಾಗಲಿ ಮೂವರಾಗಲಿ ಮಾತನಾಡಲಿ, ಮಿಕ್ಕಾದವರು ವಿವೇಚ ನೆಮಾಡಲಿ.

14:30b.1CO.014.030 ಪಕ್ಕದಲ್ಲಿ ಕೂತಿರುವ ಮತ್ತೊಬ್ಬನಿಗೆ ಪ್ರಕಟನೆ ಉಂಟಾದರೆ ಮೊದಲಿನವನು ಸುಮ್ಮನಾಗಲಿ.

14:31b.1CO.014.031 ನೀವೆಲ್ಲರೂ ಒಬ್ಬೊಬ್ಬರಾಗಿ ಪ್ರವಾದಿಸಬಹುದು; ಹೀಗೆ ಮಾಡಿದರೆ ಎಲ್ಲರೂ ಕಲಿತುಕೊಳ್ಳುವರು, ಎಲ್ಲರೂ ಆದರಣೆ ಹೊಂದುವರು.

14:32b.1CO.014.032 ಪ್ರವಾದಿಗಳ ಆತ್ಮಗಳು ಪ್ರವಾದಿಗಳ ಸ್ವಾಧೀನದಲ್ಲಿವೆ.

14:33b.1CO.014.033 ಪರಿಶುದ್ಧರ ಎಲ್ಲಾ ಸಭೆಗಳಲ್ಲಿರುವ ಪ್ರಕಾರ ದೇವರು ಸಮಾಧಾನಕ್ಕೇ ಹೊರತು ಗಲಿಬಿಲಿಗೆ ಕಾರಣನಲ್ಲ.

14:34b.1CO.014.034 ನಿಮ್ಮ ಸ್ತ್ರೀಯರು ಸಭೆಗಳಲ್ಲಿ ಮೌನವಾಗಿರಬೇಕು; ಮಾತನಾಡುವದಕ್ಕೆ ಅವರಿಗೆ ಅಪ್ಪಣೆಯಿಲ್ಲ; ಅವರು ವಿಧೇಯರಾಗಿರಬೇಕೆಂದು ನ್ಯಾಯಪ್ರಮಾಣವು ಸಹ ಹೇಳುತ್ತದಲ್ಲಾ.

14:35b.1CO.014.035 ಅವರು ಏನಾದರೂ ತಿಳುಕೊಳ್ಳುವದಕ್ಕೆ ಅಪೇಕ್ಷಿಸಿದರೆ ಮನೆಯಲ್ಲಿ ತಮ್ಮ ಗಂಡಂದಿರನ್ನು ಕೇಳಲಿ. ಸ್ತ್ರೀಯರು ಸಭೆಯಲ್ಲಿ ಮಾತನಾಡುವದು ನಾಚಿಗೆಗೆಟ್ಟದ್ದಾಗಿದೆ.

14:36b.1CO.014.036 ಏನು, ದೇವರ ವಾಕ್ಯವು ನಿಮ್ಮಿಂದಲೇ ಹೊರ ಟಿತೋ? ನಿಮಗೆ ಮಾತ್ರವೇ ಬಂತೋ?

14:37b.1CO.014.037 ಯಾವ ನಾದರೂ ತನ್ನನ್ನು ಪ್ರವಾದಿಯೆಂದಾಗಲಿ ಇಲ್ಲವೆ ಆತ್ಮಿಕನೆಂದಾಗಲಿ ಭಾವಿಸಿಕೊಂಡರೆ ನಾನು ನಿಮಗೆ ಬರೆದಿರುವ ವಿಷಯಗಳು ಕರ್ತನ ಆಜ್ಞೆಗಳೇ ಎಂದು ಚೆನ್ನಾಗಿ ತಿಳುಕೊಳ್ಳಲಿ.

14:38b.1CO.014.038 ಆದರೆ ಯಾವನಾದರೂ ತಿಳಿಯದವನಾಗಿದ್ದರೆ ಅವನು ತಿಳಿಯದವನಾಗಿಯೇ ಇರಲಿ.

14:39b.1CO.014.039 ಆದಕಾರಣ ಸಹೋದರರೇ, ಪ್ರವಾದಿಸುವದನ್ನು ಆಶಿಸಿರಿ. ಮತ್ತು ಭಾಷೆಗಳನ್ನಾಡುವದಕ್ಕೆ ಅಡ್ಡಿಮಾಡ ಬೇಡಿರಿ.ಎಲ್ಲವುಗಳು ಮರ್ಯಾದೆಯಿಂದಲೂ ಕ್ರಮವಾಗಿಯೂ ನಡೆಯಲಿ.

14:40b.1CO.014.040 ಎಲ್ಲವುಗಳು ಮರ್ಯಾದೆಯಿಂದಲೂ ಕ್ರಮವಾಗಿಯೂ ನಡೆಯಲಿ.

15

15:1b.1CO.015.001 ಇದಲ್ಲದೆ ಸಹೋದರರೇ, ನಾನು ನಿಮಗೆ ಸಾರಿದ ಸುವಾರ್ತೆಯನ್ನು ತಿಳಿಯಪಡಿ ಸುತ್ತೇನೆ; ನೀವು ಅದನ್ನು ಅಂಗೀಕರಿಸಿದಿರಿ ಮತ್ತು ಅದರಲ್ಲಿ ನಿಂತಿದ್ದೀರಿ.

15:2b.1CO.015.002 ನಾನು ನಿಮಗೆ ಸಾರಿರುವದನ್ನು ನೀವು ಜ್ಞಾಪಕದಲ್ಲಿಟ್ಟುಕೊಂಡವರಾಗಿದ್ದು ನಿಮ್ಮ ನಂಬಿಕೆಯು ವ್ಯರ್ಥವಾಗಿರದಿದ್ದರೆ ಅದರಿಂದಲೂ ನೀವು ರಕ್ಷಣೆ ಹೊಂದಿದ್ದೀರಿ.

15:3b.1CO.015.003 ನಾನು ಸಹ ಎಲ್ಲಾದಕ್ಕಿಂತಲೂ ಮೊದಲು ಹೊಂದಿದ್ದನ್ನು ನಿಮಗೆ ತಿಳಿಸಿದ್ದೇನೆ. ಅದೇನಂದರೆ, ಬರಹದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತನು.

15:4b.1CO.015.004 ಹೂಣಲ್ಪಟ್ಟನು; ಬರಹದ ಪ್ರಕಾರವೇ ಆತನು ಮೂರನೆಯ ದಿನದಲ್ಲಿ ತಿರಿಗಿ ಎದ್ದುಬಂದನು.

15:5b.1CO.015.005 ತರುವಾಯ ಆತನು ಕೇಫನಿಗೂ ಆಮೇಲೆ ಹನ್ನೆರಡು ಮಂದಿಗೂ ಕಾಣಿಸಿ ಕೊಂಡನು.

15:6b.1CO.015.006 ಇದಾದ ಮೇಲೆ ಒಂದೇ ಸಮಯದಲ್ಲಿ ಐನೂರಕ್ಕಿಂತ ಹೆಚ್ಚು ಸಹೋದರರಿಗೆ ಆತನು ಕಾಣಿಸಿ ಕೊಂಡನು; ಇದರಲ್ಲಿ ಹೆಚ್ಚು ಜನರು ಇಂದಿನವರೆಗೂ ಇದ್ದಾರೆ; ಆದರೆ ಕೆಲವರು ನಿದ್ರೆಹೋಗಿದ್ದಾರೆ.

15:7b.1CO.015.007 ತರುವಾಯ ಆತನು ಯಾಕೋಬನಿಗೂ ಆಮೇಲೆ ಅಪೊಸ್ತಲರೆಲ್ಲರಿಗೂ ಕಾಣಿಸಿಕೊಂಡನು.

15:8b.1CO.015.008 ಕಟ್ಟಕಡೆಗೆ ದಿನ ತುಂಬದೆ ಹುಟ್ಟಿದವನಂತಿರುವ ನನಗೂ ಕಾಣಿಸಿ ಕೊಂಡನು.

15:9b.1CO.015.009 ನಾನಂತೂ ಅಪೊಸ್ತಲರಲ್ಲಿ ಕನಿಷ್ಠನಷ್ಟೆ. ಯಾಕಂದರೆ ನಾನು ದೇವರ ಸಭೆಯನ್ನು ಹಿಂಸೆಪಡಿಸಿ ದ್ದರಿಂದ ಆಪೊಸ್ತಲನೆನಿಸಿಕೊಳ್ಳುವದಕ್ಕೆ ಯೋಗ್ಯನಲ್ಲ.

15:10b.1CO.015.010 ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ; ನನಗುಂಟಾದ ಆತನ ಕೃಪೆಯು ನಿಷ್ಪಲವಾಗಲಿಲ್ಲ; ನಾನು ಅವರೆಲ್ಲರಿ ಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು; ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.

15:11b.1CO.015.011 ಹಾಗಾದರೆ ನಾನಾದರೇನು, ಅವರಾದ ರೇನು, ಹಾಗೆಯೇ ನಾವು ಸಾರಿದೆವು. ಹಾಗೆಯೇ ನೀವು ನಂಬಿದಿರಿ.

15:12b.1CO.015.012 ಕ್ರಿಸ್ತನು ಸತ್ತವರೊಳಗಿಂದ ಎದ್ದನೆಂದು ಸಾರೋಣ ವಾಗುತ್ತಿರುವಲ್ಲಿ ಸತ್ತವರಿಗೆ ಪುನರುತ್ಥಾನವೇ ಇಲ್ಲ ವೆಂದು ನಿಮ್ಮೊಳಗೆ ಕೆಲವರು ಹೇಳುವದು ಹೇಗೆ?

15:13b.1CO.015.013 ಸತ್ತವರಿಗೆ ಪುನರುತ್ಥಾನವಿಲ್ಲವಾದರೆ ಕ್ರಿಸ್ತನಾದರೂ ಎದ್ದು ಬರಲಿಲ್ಲ.

15:14b.1CO.015.014 ಕ್ರಿಸ್ತನು ಎದ್ದು ಬರಲಿಲ್ಲವಾದರೆ ನಮ್ಮ ಪ್ರಸಂಗವೂ ವ್ಯರ್ಥವಾದದ್ದು, ನಿಮ್ಮ ನಂಬಿಕೆಯೂ ವ್ಯರ್ಥವಾದದ್ದು.

15:15b.1CO.015.015 ಹೌದು, ಸತ್ತವರು ಏಳಲಿಲ್ಲವಾದರೆ ದೇವರು ಕ್ರಿಸ್ತನನ್ನು ಎಬ್ಬಿಸಲೇ ಇಲ್ಲ, ಎಬ್ಬಿಸಿದನೆಂದು ಸಾಕ್ಷಿಕೊಟ್ಟ ನಾವು ದೇವರ ವಿಷಯ ವಾಗಿ ಸುಳ್ಳುಸಾಕ್ಷಿ ಹೇಳಿದವರಾಗಿ ಕಂಡುಬಂದೇವು.

15:16b.1CO.015.016 ಸತ್ತವರು ಏಳಲಿಲ್ಲವಾದರೆ ಕ್ರಿಸ್ತನು ಎಬ್ಬಿಸಲ್ಪಡಲಿಲ್ಲ.

15:17b.1CO.015.017 ಕ್ರಿಸ್ತನು ಎಬ್ಬಿಸಲ್ಪಡಲಿಲ್ಲವಾದರೆ ನಿಮ್ಮ ನಂಬಿಕೆಯು ವ್ಯರ್ಥವಾಗಿದೆ; ನೀವು ಇನ್ನೂ ನಿಮ್ಮ ಪಾಪಗಳಲ್ಲಿಯೇ ಇದ್ದೀರಿ.

15:18b.1CO.015.018 ಇದು ಮಾತ್ರವಲ್ಲದೆ ಕ್ರಿಸ್ತನಲ್ಲಿ ನಿದ್ರೆ ಹೋದವರೂ ನಾಶವಾದರು.

15:19b.1CO.015.019 ಈ ಜೀವದಲ್ಲಿ ಮಾತ್ರ ನಾವು ಕ್ರಿಸ್ತನಲ್ಲಿ ನಿರೀಕ್ಷೆಯಿಟ್ಟುಕೊಂಡವ ರಾಗಿದ್ದರೆ ನಾವು ಎಲ್ಲಾ ಮನುಷ್ಯರಿಗಿಂತಲೂ ನಿರ್ಭಾಗ್ಯರೇ ಸರಿ.

15:20b.1CO.015.020 ಆದರೆ ಈಗ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದು ನಿದ್ರೆಹೋದವರಲ್ಲಿ ಪ್ರಥಮಫಲವಾದನು.

15:21b.1CO.015.021 ಮನುಷ್ಯನ ಮೂಲಕ ಮರಣವುಂಟಾದ ಕಾರಣ ಮನುಷ್ಯನ ಮೂಲಕವೇ ಸತ್ತವರಿಗೆ ಪುನರುತ್ಥಾನ ವುಂಟಾಗುವದು.

15:22b.1CO.015.022 ಯಾವ ಪ್ರಕಾರ ಆದಾಮನಲ್ಲಿ ಎಲ್ಲರೂ ಸಾಯುವವರಾದರೋ ಅದೇ ಪ್ರಕಾರ ಕ್ರಿಸ್ತನಲ್ಲಿ ಎಲ್ಲರೂ ಜೀವಿತರಾಗುವರು.

15:23b.1CO.015.023 ಆದರೆ ಪ್ರತಿಯೊಬ್ಬನು ತನ್ನ ತನ್ನ ತರಗತಿಯಲ್ಲಿ ಇರುವನು; ಕ್ರಿಸ್ತನು ಪ್ರಥಮ ಫಲ, ತರುವಾಯ ಕ್ರಿಸ್ತನ ಬರೋಣದಲ್ಲಿ ಆತನವರು.

15:24b.1CO.015.024 ಆಮೇಲೆ ಆತನು ಬೇರೆ ಎಲ್ಲಾ ದೊರೆತನವನ್ನೂ ಎಲ್ಲಾ ಅಧಿಕಾರವನ್ನೂ ಬಲವನ್ನೂ ನಿವೃತ್ತಿಮಾಡಿ ತಂದೆಯಾಗಿರುವ ದೇವರಿಗೆ ರಾಜ್ಯವನ್ನು ಒಪ್ಪಿಸಿ ಕೊಡುವಾಗ ಸಮಾಪ್ತಿ ಯಾಗುವದು.

15:25b.1CO.015.025 ಯಾಕಂದರೆ ತಾನು ಎಲ್ಲಾ ವಿರೋಧಿ ಗಳನ್ನು ತನ್ನ ಪಾದಗಳ ಕೆಳಗೆ ಹಾಕುವ ತನಕ ಆತನು ಆಳುವದು ಅವಶ್ಯ.

15:26b.1CO.015.026 ನಾಶವಾಗಲಿರುವ ಕಡೇ ಶತ್ರುವು ಮರಣ.

15:27b.1CO.015.027 ದೇವರು ಸಮಸ್ತವನ್ನೂ ಕ್ರಿಸ್ತನ ಪಾದಗಳ ಕೆಳಗೆ ಹಾಕಿದ್ದಾನೆ. ಸಮಸ್ತವೂ ಆತನಿಗೆ ಅಧೀನ ಮಾಡಲ್ಪಟ್ಟಿದೆ ಎಂದು ಹೇಳುವಾಗ ಸಮಸ್ತವನ್ನು ಅಧೀನ ಮಾಡಿದಾತನು ಅದರಲ್ಲಿ ಸೇರಲಿಲ್ಲವೆಂಬದು ಸ್ಪಷ್ಟವಾಗಿದೆ.

15:28b.1CO.015.028 ಸಮಸ್ತವೂ ಆತನಿಗೆ ಅಧೀನವಾದ ಮೇಲೆ ಮಗನು ಸಹ ಸಮಸ್ತವನ್ನೂ ತನಗೆ ಅಧೀನ ಮಾಡಿಕೊಟ್ಟಾತನಿಗೆ ತಾನೇ ಅಧೀನನಾಗುವನು; ಹೀಗೆ ದೇವರು ಸಮಸ್ತರಲ್ಲಿಯೂ ಸಮಸ್ತವೂ ಆಗಿರುವನು.

15:29b.1CO.015.029 ಸತ್ತವರು ಏಳುವದೇ ಇಲ್ಲವಾದರೆ ಸತ್ತವರಿ ಗೋಸ್ಕರ ಬಾಪ್ತಿಸ್ಮ ಮಾಡಿಸಿಕೊಳ್ಳುವವರು ಏನು ಮಾಡುವರು? ಹಾಗಿದ್ದರೆ ಸತ್ತವರಿಗೊಸ್ಕರ ಅವರು ಬಾಪ್ತಿಸ್ಮ ಮಾಡಿಸಿಕೊಳ್ಳುವದು ಯಾಕೆ?

15:30b.1CO.015.030 ನಾವು ಸಹ ಪ್ರತಿಗಳಿಗೆಯಲ್ಲಿಯೂ ಯಾಕೆ ಜೀವದ ಭಯದಿಂದಿ ದ್ದೇವೆ?

15:31b.1CO.015.031 ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ನಿಮ್ಮ ವಿಷಯವಾಗಿ ನನಗಿರುವ ಸಂತೋಷದ ನಿಮಿತ್ತ ನಾನು ದಿನಾಲು ಸಾಯುತ್ತಲಿದ್ದೇನೆ ಎಂದು ಹೇಳುತ್ತೇನೆ.

15:32b.1CO.015.032 ನಾನು ಎಫೆಸದಲ್ಲಿ ಮೃಗಗಳೊಂದಿಗೆ ಯುದ್ಧ ಮಾಡಿದ್ದು ಕೇವಲ ಮನುಷ್ಯರೀತಿಯಾಗಿದ್ದು ಸತ್ತವರು ಎದ್ದು ಬರುವದಿಲ್ಲವಾದರೆ ಅದರಿಂದ ನನಗೇನು ಪ್ರಯೋಜನ? ಹಾಗಾದರೆ ನಾವು ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ.

15:33b.1CO.015.033 ಮೋಸ ಹೋಗಬೇಡಿರಿ; ದುಸ್ಸಹವಾಸವು ಒಳ್ಳೇನಡವಳಿಕೆ ಯನ್ನು ಕೆಡಿಸುತ್ತದೆ.

15:34b.1CO.015.034 ನೀತಿಗಾಗಿ ಎಚ್ಚರಗೊಳ್ಳಿರಿ, ಪಾಪಮಾಡಬೇಡಿರಿ; ಕೆಲವರಿಗೆ ದೇವರ ವಿಷಯವಾದ ಜ್ಞಾನವೇ ಇಲ್ಲ; ನಾನು ಇದನ್ನು ನಿಮಗೆ ನಾಚಿಕೆ ಪಡಿಸುವದಕ್ಕಾಗಿ ಹೇಳುತ್ತೇನೆ.

15:35b.1CO.015.035 ಆದರೆ ಒಬ್ಬನು--ಸತ್ತವರು ಹೇಗೆ ಎಬ್ಬಿಸ ಲ್ಪಡುತ್ತಾರೆ? ಎಂಥ ದೇಹದಿಂದ ಅವರು ಬರುತ್ತಾರೆ ಎಂದು ಕೇಳಾನು.

15:36b.1CO.015.036 ಮೂಢನು ನೀನು; ನೀನು ಬಿತ್ತಿರುವದು ಸಾಯದ ಹೊರತು ಜೀವಿತವಾಗು ವದಿಲ್ಲ.

15:37b.1CO.015.037 ಒಂದು ವೇಳೆ ಗೋಧಿಯನ್ನಾಗಲಿ ಬೇರೆ ಯಾವದೋ ಬೀಜವನ್ನಾಗಲಿ ಬಿತ್ತುವಾಗ ಬರೀ ಕಾಳನ್ನೇ ಹೊರತು ಮುಂದೆ ಆಗಬೇಕಾದ ದೇಹವನ್ನು ಬಿತ್ತುವದಿಲ್ಲ.

15:38b.1CO.015.038 ಆದರೆ ದೇವರು ತನ್ನ ಇಷ್ಟದಂತೆ ಅದಕ್ಕೆ ದೇಹವನ್ನು ಕೊಡುತ್ತಾನೆ. ಒಂದೊಂದು ಬೀಜಕ್ಕೆ ಅದರದರ ದೇಹವನ್ನು ಕೊಡುತ್ತಾನೆ.

15:39b.1CO.015.039 ಎಲ್ಲಾ ಶರೀರಗಳು ಒಂದೇ ವಿಧವಾದವುಗಳಲ್ಲ; ಮನುಷ್ಯರ ಶರೀರ ಬೇರೆ, ಪಶುಗಳ ಶರೀರ ಬೇರೆ, ವಿಾನುಗಳದು ಬೇರೆ, ಪಕ್ಷಿಗಳದು ಬೇರೆ.

15:40b.1CO.015.040 ಇದಲ್ಲದೆ ಆಕಾಶದ ದೇಹಗಳು ಮತ್ತು ಭೂಮಂಡಲದ ದೇಹಗಳು ಇವೆ;ಆದರೆ ಆಕಾಶದ ಮಹಿಮೆ ಒಂದು ವಿಧ ಮತ್ತು ಭೂಮಂಡಲದ ಮಹಿಮೆ ಮತ್ತೊಂದು ವಿಧ.

15:41b.1CO.015.041 ಸೂರ್ಯನ ಮಹಿಮೆ ಒಂದು ವಿಧ, ಚಂದ್ರನ ಮಹಿಮೆ ಮತ್ತೊಂದು ವಿಧ, ನಕ್ಷತ್ರಗಳ ಮಹಿಮೆ ಇನ್ನೊಂದು ವಿಧ ಮಹಿಮೆಯಲ್ಲಿ ಒಂದು ನಕ್ಷತ್ರಕ್ಕೂ ಇನ್ನೊಂದು ನಕ್ಷತ್ರಕ್ಕೂ ಹೆಚ್ಚು ಕಡಿಮೆಯುಂಟಷ್ಟೆ.

15:42b.1CO.015.042 ಸತ್ತವರಿಗಾಗುವ ಪುನರುತ್ಥಾನವು ಅದೇ ಪ್ರಕಾರ ವಾಗಿರುವದು. ದೇಹವು ಲಯಾವಸ್ಥೆಯಲ್ಲಿ ಬಿತ್ತಲ್ಪಡು ತ್ತದೆ. ನಿರ್ಲಯಾವಸ್ಥೆಯಲ್ಲಿ ಎಬ್ಬಿಸಲ್ಪಡುತ್ತದೆ.

15:43b.1CO.015.043 ಹೀನಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಮಹಿಮೆಯಲ್ಲಿ ಎಬ್ಬಿಸಲ್ಪಡುತ್ತದೆ; ನಿರ್ಬಲಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಬಲಾವಸ್ಥೆಯಲ್ಲಿ ಎಬ್ಬಿಸಲ್ಪಡುತ್ತದೆ.

15:44b.1CO.015.044 ಪ್ರಾಕೃತ ದೇಹವಾಗಿ ಬಿತ್ತಲ್ಪಡುತ್ತದೆ, ಆತ್ಮಿಕದೇಹವಾಗಿ ಎಬ್ಬಿಸಲ್ಪಡುತ್ತದೆ; ಪ್ರಾಕೃತದೇಹವಿರುವದಾದರೆ ಆತ್ಮಿಕ ದೇಹವೂ ಇರುವದು.

15:45b.1CO.015.045 ಬರೆದಿರುವ ಪ್ರಕಾರ-- ಮೊದಲನೆಯ ಮನುಷ್ಯನಾದ ಆದಾಮನು ಜೀವಾತ್ಮ ನಾದನು; ಕಡೇ ಆದಾಮನು ಬದುಕಿಸುವ ಆತ್ಮ ನಾಗಿದ್ದಾನೆ.

15:46b.1CO.015.046 ಹೇಗಿದ್ದರೂ ಆತ್ಮಿಕವಾದದ್ದು ಮೊದಲ ನೆಯದಲ್ಲ, ಪ್ರಾಕೃತವಾದದ್ದು ಮೊದಲನೆಯದು; ಆಮೇಲೆ ಆತ್ಮಿಕವಾದದ್ದು.

15:47b.1CO.015.047 ಮೊದಲನೆಯ ಮನುಷ್ಯನು ಮಣ್ಣಿನಿಂದ ಉಂಟಾಗಿ ಮಣ್ಣಿಗೆ ಸಂಬಂಧ ಪಟ್ಟವನು; ಎರಡನೆಯ ಮನುಷ್ಯನು ಪರಲೋಕದಿಂದ ಬಂದ ಕರ್ತನು.

15:48b.1CO.015.048 ಮೊದಲನೆಯ ಮನುಷ್ಯನು ಮಣ್ಣಿನಿಂದ ಉಂಟಾಗಿ ಮಣ್ಣಿಗೆ ಸಂಬಂಧ ಪಟ್ಟವನು; ಎರಡನೆಯ ಮನುಷ್ಯನು ಪರಲೋಕದಿಂದ ಬಂದ ಕರ್ತನು.

15:49b.1CO.015.049 ನಾವು ಮಣ್ಣಿನಿಂದ ಹುಟ್ಟಿದವನ ಸಾರೂಪ್ಯವನ್ನು ಧರಿಸಿಕೊಂಡಿರುವ ಪ್ರಕಾರ ಪರಲೋಕದಿಂದ ಬಂದಾ ತನ ಸಾರೂಪ್ಯವನ್ನೂ ಧರಿಸಿಕೊಳ್ಳುವೆವು.

15:50b.1CO.015.050 ಸಹೋದರರೇ, ನಾನು ಹೇಳುವದೇನಂದರೆ-- ಮಾಂಸವು ರಕ್ತವು ದೇವರ ರಾಜ್ಯಕ್ಕೆ ಬಾಧ್ಯವಾಗ ಲಾರವು; ಇಲ್ಲವೆ ಲಯವಾಗುವದು ನಿರ್ಲಯತ್ವಕ್ಕೆ ಬಾಧ್ಯವಾಗುವದಿಲ್ಲ.

15:51b.1CO.015.051 ಇಗೋ, ಮರ್ಮವಾಗಿದ್ದ ಒಂದು ಸಂಗತಿಯನ್ನು ನಿಮಗೆ ತಿಳಿಸುತ್ತೇನೆ-- ನಾವೆಲ್ಲರೂ ನಿದ್ರೆಹೋಗುವದಿಲ್ಲ, ಆದರೆ ನಾವೆ ಲ್ಲರೂ ಮಾರ್ಪಡುವೆವು.

15:52b.1CO.015.052 ಕಡೇ ತುತೂರಿಯು ಧ್ವನಿಯಾಗುವಾಗ ನಾವು ಒಂದು ಕ್ಷಣದಲ್ಲೇ ರೆಪ್ಪೆಬಡಿಯುವಷ್ಟರೊಳಗಾಗಿ ಮಾರ್ಪಡುವೆವು. ತುತೂರಿಯು ಊದಲಾಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ಮಾರ್ಪಡುವೆವು.

15:53b.1CO.015.053 ಲಯ ವಾಗುವಂಥದ್ದು (ಈ ದೇಹವು) ನಿರ್ಲಯತ್ವವನ್ನು ಧರಿಸಿಕೊಳ್ಳುವದೂ ಮರಣಾಧೀನವಾಗಿರುವಂಥ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವದೂ ಅವಶ್ಯ.

15:54b.1CO.015.054 ಲಯವಾಗುವಂಥದ್ದು ನಿರ್ಲಯತ್ವವನ್ನು ಧರಿಸಿ ಕೊಳ್ಳುವದು, ಮರಣಾಧೀನವಾಗಿರುವಂಥದ್ದು ಅಮರ ತ್ವವನ್ನು ಧರಿಸಿಕೊಳ್ಳುವದು; ಆಗ ಬರೆದಿರುವ ಮಾತು ನೆರವೇರುವದು, ಆ ಮಾತು ಏನಂದರೆ--ಜಯವು ಮರಣವನ್ನು ನುಂಗಿತು ಎಂಬದೇ.

15:55b.1CO.015.055 ಓ ಮರಣವೇ, ನಿನ್ನ ಕೊಂಡಿಯೆಲ್ಲಿ? ಓ ಸಮಾಧಿಯೇ ನಿನ್ನ ಜಯವೆಲ್ಲಿ?

15:56b.1CO.015.056 ಮರಣದ ಕೊಂಡಿ ಪಾಪವೇ; ಪಾಪದ ಬಲವು ನ್ಯಾಯಪ್ರಮಾಣವೇ.

15:57b.1CO.015.057 ಆದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸ್ತೋತ್ರ.ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.

15:58b.1CO.015.058 ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.

16

16:1b.1CO.016.001 ಪರಿಶುದ್ಧರಿಗೋಸ್ಕರ ಹಣವನ್ನೆತ್ತುವ ವಿಷಯದಲ್ಲಿ ಗಲಾತ್ಯ ಸಭೆಗಳಿಗೆ ನಾನು ಅಪ್ಪಣೆಕೊಟ್ಟಂತೆ ನೀವೂ ಮಾಡಿರಿ.

16:2b.1CO.016.002 ನಾನು ಬಂದಾಗ (ಹಣ) ಕೂಡಿಸುವದು ಇರದಂತೆ ದೇವರು ಅಭಿವೃದ್ಧಿ ಪಡಿಸಿದ ಪ್ರಕಾರ ವಾರದ ಮೊದಲನೆಯ ದಿನದಲ್ಲಿ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಹತ್ತಿರ ಕೂಡಿಟ್ಟುಕೊಳ್ಳಲಿ.

16:3b.1CO.016.003 ನೀವು ಧಾರಾಳವಾಗಿ ಕೊಟ್ಟದ್ದನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋಗುವಂತೆ ನೀವು ನಿಮ್ಮ ಪತ್ರಗಳಿಂದ ಯಾರನ್ನು ಯೋಗ್ಯರೆಂದು ಸೂಚಿಸು ವಿರೋ ಅವರನ್ನು ನಾನು ಕಳುಹಿಸುವೆನು.

16:4b.1CO.016.004 ನಾನು ಸಹ ಹೋಗುವದು ಯುಕ್ತವಾಗಿ ತೋರಿದರೆ ಅವರು ನನ್ನ ಜೊತೆಯಲ್ಲಿ ಹೋಗಬಹುದು.

16:5b.1CO.016.005 ನಾನು ಮಕೆದೋನ್ಯವನ್ನು ಹಾದು ಹೋಗುವಾಗ ನಿಮ್ಮ ಬಳಿಗೆ ಬರುವೆನು; ಯಾಕಂದರೆ ನಾನು ಮಕೆದೋನ್ಯವನ್ನು ಹಾದು ಹೋಗಲೇಬೇಕು.

16:6b.1CO.016.006 ನಿಮ್ಮಲ್ಲಿದ್ದು ಹಿಮಕಾಲ ವನ್ನಾದರೂ ಕಳೆದೇನು; ಆಗ ನಾನು ಹೋಗಬೇಕಾದ ಸ್ಥಳಕ್ಕೆ ನೀವು ನನ್ನನ್ನು ಸಾಗ ಕಳುಹಿಸಬಹುದು.

16:7b.1CO.016.007 ಈಗ ನನ್ನ ಪ್ರಯಾಣದಲ್ಲಿ ನಿಮ್ಮನ್ನು ನೋಡಲು ನನಗೆ ಇಷ್ಟವಿಲ್ಲ, ಕರ್ತನ ಅಪ್ಪಣೆಯಾದರೆ ನಾನು ನಿಮ್ಮೊಂದಿಗೆ ಸ್ವಲ್ಪ ಕಾಲ ಇರುವದಕ್ಕೆ ನಿರೀಕ್ಷಿಸುತ್ತೇನೆ.

16:8b.1CO.016.008 ಪಂಚಾ ಶತ್ತಮ ದಿನದ ವರೆಗೆ ನಾನು ಎಫೆಸದಲ್ಲಿ ಇರುವೆನು.

16:9b.1CO.016.009 ಕಾರ್ಯಸಾಧಕವಾಗುವ ದೊಡ್ಡದೊಂದು ಬಾಗಲು ನನಗೋಸ್ಕರ ತೆರೆಯಲ್ಪಟ್ಟಿದೆ, ಅನೇಕ ವಿರೋಧಿಗಳು ಇದ್ದಾರೆ.

16:10b.1CO.016.010 ತಿಮೋಥೆಯನು ಬಂದರೆ ಅವನು ನಿಮ್ಮ ಬಳಿ ಯಲ್ಲಿ ಭಯವಿಲ್ಲದೆ ಇರುವಂತೆ ನೋಡಿಕೊಳ್ಳಿರಿ; ನನ್ನ ಹಾಗೆಯೇ ಅವನು ಕರ್ತನ ಕೆಲಸವನ್ನು ನಡಿಸುತ್ತಾನೆ.

16:11b.1CO.016.011 ಆದದರಿಂದ ಯಾರೂ ಅವನನ್ನು ಹೀನೈಸಬಾರದು; ಅವನು ನನ್ನ ಬಳಿಗೆ ಬರುವಂತೆ ಅವನನ್ನು ಸಮಾಧಾನ ದಿಂದ ಸಾಗಕಳುಹಿಸಿರಿ; ಅವನು ಸಹೋದರರೊಂದಿಗೆ ಬರುವದನ್ನು ನಾನು ಎದುರು ನೋಡುತ್ತೇನೆ.

16:12b.1CO.016.012 ಸಹೋದರನಾದ ಅಪೊಲ್ಲೋಸನು ಸಹೋದರ ರೊಂದಿಗೆ ನಿಮ್ಮ ಬಳಿಗೆ ಹೋಗಬೇಕೆಂದು ನಾನು ಬಹಳವಾಗಿ ಇಷ್ಟಪಟ್ಟೆನು. ಆದರೆ ಈಗ ಬರುವದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿರಲಿಲ್ಲ; ಅನುಕೂಲವಾದ ಸಮಯ ಸಿಕ್ಕಿದಾಗ ಬರುವನು.

16:13b.1CO.016.013 ಸಹೋದರನಾದ ಅಪೊಲ್ಲೋಸನು ಸಹೋದರ ರೊಂದಿಗೆ ನಿಮ್ಮ ಬಳಿಗೆ ಹೋಗಬೇಕೆಂದು ನಾನು ಬಹಳವಾಗಿ ಇಷ್ಟಪಟ್ಟೆನು. ಆದರೆ ಈಗ ಬರುವದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿರಲಿಲ್ಲ; ಅನುಕೂಲವಾದ ಸಮಯ ಸಿಕ್ಕಿದಾಗ ಬರುವನು.

16:14b.1CO.016.014 ನೀವು ಮಾಡುವದನ್ನೆಲ್ಲಾ ಪ್ರೀತಿಯಿಂದ ಮಾಡಿರಿ.

16:15b.1CO.016.015 ಸ್ತೆಫನನ ಮನೆಯವರು ಅಕಾಯದ ಪ್ರಥಮ ಫಲವೆಂದೂ ಅವರು ಪರಿಶುದ್ಧರ ಸೇವೆಯಲ್ಲಿ ತಮ್ಮನ್ನು ಒಪ್ಪಿಸಿಕೊಟ್ಟಿದ್ದರೆಂದೂ ನಿಮಗೆ ತಿಳಿದದೆ.

16:16b.1CO.016.016 ಆದದರಿಂದ ಅಂಥವರಿಗೂ ನಮ್ಮೊಂದಿಗೆ ಸಹಾಯ ಮಾಡುತ್ತಾ ಪ್ರಯಾಸಪಡುವ ಪ್ರತಿಯೊಬ್ಬನಿಗೂ ನೀವು ಅಧೀನರಾಗಬೇಕೆಂದು ನಾನು ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.

16:17b.1CO.016.017 ಸ್ತೆಫನನೂ ಫೊರ್ತುನಾತನೂ ಅಖಾಯಿಕನೂ ಬಂದದರಿಂದ ನನಗೆ ಸಂತೋಷ ವಾಯಿತು. ನೀವು ಇಲ್ಲದ್ದರಿಂದ ಉಂಟಾದ ಕೊರತೆ ಯನ್ನು ಅವರು ನೀಗಿಸಿದರು.

16:18b.1CO.016.018 ಅವರು ನನ್ನ ಆತ್ಮವನ್ನೂ ನಿಮ್ಮ ಆತ್ಮಗಳನ್ನೂ ಉಪಶಮನ ಮಾಡಿದರು. ಇಂಥವರನ್ನು ಸನ್ಮಾನಿಸಿರಿ.

16:19b.1CO.016.019 ಆಸ್ಯ ಸಭೆಗಳವರು ನಿಮಗೆ ವಂದನೆ ಹೇಳುತ್ತಾರೆ. ಅಕ್ವಿಲನೂ ಪ್ರಿಸ್ಕಿಲ್ಲಳೂ ತಮ್ಮ ಮನೆಯಲ್ಲಿ ಕೂಡುವ ಸಭೆಯವರೊಂದಿಗೆ ಕರ್ತನಲ್ಲಿ ಅನೇಕ ವಂದನೆಗಳನ್ನು ಹೇಳುತ್ತಾರೆ.

16:20b.1CO.016.020 ಸಹೋದರ ರೆಲ್ಲರೂ ನಿಮ್ಮನ್ನು ವಂದಿಸುತ್ತಾರೆ. ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.

16:21b.1CO.016.021 ಪೌಲನೆಂಬ ನಾನು ಸ್ವಂತ ಕೈಯಿಂದ ವಂದನೆ ಯನ್ನು ಬರೆದಿದ್ದೇನೆ.

16:22b.1CO.016.022 ಯಾವನಾದರೂ ಕರ್ತನಾದ ಯೇಸು ಕ್ರಿಸ್ತನನ್ನು ಪ್ರೀತಿಸದಿದ್ದರೆ ಅವನು ಅನಾಥಿಮ (ಶಾಪಗ್ರಸ್ತನಾಗಲಿ;) ಮಾರನಾಥ (ನಮ್ಮ ಕರ್ತನು ಬರುತ್ತಾನೆ).

16:23b.1CO.016.023 ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ.ಕ್ರಿಸ್ತ ಯೇಸುವಿನಲ್ಲಿ ನಿಮ್ಮೆಲ್ಲರೊಂದಿಗೆ ನನ್ನ ಪ್ರೀತಿ ಇರಲಿ. ಆಮೆನ್‌.

16:24b.1CO.016.024 ಕ್ರಿಸ್ತ ಯೇಸುವಿನಲ್ಲಿ ನಿಮ್ಮೆಲ್ಲರೊಂದಿಗೆ ನನ್ನ ಪ್ರೀತಿ ಇರಲಿ. ಆಮೆನ್‌.


Holder of rights
Multilingual Bible Corpus

Citation Suggestion for this Object
TextGrid Repository (2025). Kannada Collection. 1 Corinthians (Kannada). 1 Corinthians (Kannada). Multilingual Parallel Bible Corpus. Multilingual Bible Corpus. https://hdl.handle.net/21.11113/0000-0016-A1F8-A