Philippians (Kannada)
1
1:1b.PHI.001.001 ಯೇಸು ಕ್ರಿಸ್ತನ ಸೇವಕರಾದ ಪೌಲ ತಿಮೊಥೆಯರು ಕ್ರಿಸ್ತ ಯೇಸುವಿನಲ್ಲಿ ಫಿಲಿಪ್ಪಿಯದ ಪರಿಶುದ್ಧರೆಲ್ಲರಿಗೂ ಅವರೊಂದಿಗಿರುವ ಸಭಾಧ್ಯಕ್ಷರಿಗೂ ಸಭಾಸೇವಕರಿಗೂ--
1:2b.PHI.001.002 ನಮ್ಮ ತಂದೆ ಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತ ನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
1:3b.PHI.001.003 ನಾನು ನಿಮ್ಮನ್ನು ನೆನಸಿಕೊಳ್ಳುವಾಗೆಲ್ಲಾ ನನ್ನ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇನೆ;
1:4b.PHI.001.004 ನಾನು ನಿಮ್ಮೆಲ್ಲರಿಗೋಸ್ಕರ ಯಾವಾಗಲೂ ಮಾಡುವ ನನ್ನ ಪ್ರತಿಯೊಂದು ಪ್ರಾರ್ಥನೆಯಲ್ಲಿ ಸಂತೋಷದಿಂದಲೇ ಬೇಡಿಕೊಳ್ಳುವವನಾಗಿದ್ದೇನೆ.
1:5b.PHI.001.005 ನೀವು ಮೊದಲಿನ ದಿನದಿಂದ ಇಂದಿನವರೆಗೂ ಸುವಾರ್ತಾ ಸೇವೆಗಾಗಿ ಸಹಕಾರಿಗಳಾಗಿದ್ದೀರೆಂದು ನನ್ನ ದೇವರಿಗೆ ಕೃತಜ್ಞತಾ ಸ್ತುತಿ ಮಾಡುತ್ತೇನೆ.
1:6b.PHI.001.006 ಒಳ್ಳೇ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ಯೇಸು ಕ್ರಿಸ್ತನ ದಿನದವರೆಗೆ ಸಿದ್ದಿಗೆ ತರುವನೆಂದು ನನಗೆ ಭರವಸ ವುಂಟು.
1:7b.PHI.001.007 ನಿಮ್ಮೆಲ್ಲರ ವಿಷಯದಲ್ಲಿ ಹೀಗೆ ಯೋಚಿಸು ವದು ನನಗೆ ನ್ಯಾಯವಾಗಿದೆ; ಯಾಕಂದರೆ ನಾನು ಬೇಡಿಬಿದ್ದಿರುವಾಗಲೂ ಸುವಾರ್ತೆಯ ವಿಷಯದಲ್ಲಿ ಉತ್ತರ ಹೇಳಿ ಸ್ಥಾಪಿಸುವಾಗಲೂ ನೀವೆಲ್ಲರು ನಾನು ಹೊಂದಿದ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ.
1:8b.PHI.001.008 ಯೇಸು ಕ್ರಿಸ್ತನಿಗಿರುವಂಥ ಕನಿಕರದಿಂದ ನಿಮ್ಮೆಲ್ಲರಿ ಗೋಸ್ಕರ ನಾನು ಎಷ್ಟೋ ಹಂಬಲಿಸುತ್ತೇನೆ; ಇದಕ್ಕೆ ದೇವರೇ ನನ್ನ ಸಾಕ್ಷಿ.
1:9b.PHI.001.009 ನಿಮ್ಮ ಪ್ರೀತಿಯು ಹೆಚ್ಚುತ್ತಾ ಹೆಚ್ಚುತ್ತಾ ನೀವು ಜ್ಞಾನ ಮತ್ತು ಪೂರ್ಣ ವಿವೇಕಗಳಿಂದ ಕೂಡಿದವರಾಗಿರಬೇಕೆಂತಲೂ
1:10b.PHI.001.010 ಉತ್ತಮ ಕಾರ್ಯ ಗಳು ಯಾವವೆಂದು ನೀವು ವಿವೇಚಿಸುವವರಾಗ ಬೇಕೆಂತಲೂ ಕ್ರಿಸ್ತನ ದಿನದವರೆಗೆ ನೀವು ಸರಳ ರಾಗಿಯೂ ನಿರ್ಮಲರಾಗಿಯೂ ಇರಬೇಕೆಂತಲೂ
1:11b.PHI.001.011 ಯೇಸು ಕ್ರಿಸ್ತನ ಮೂಲಕ ನೀತಿಯೆಂಬ ಫಲಗಳಿಂದ ತುಂಬಿದವರಾಗಿ ದೇವರಿಗೆ ಮಹಿಮೆಯನ್ನೂ ಸ್ತೋತ್ರ ವನ್ನೂ ತರುವವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.
1:12b.PHI.001.012 ಸಹೋದರರೇ, ನನಗೆ ಸಂಭವಿಸಿರುವದು ಸುವಾರ್ತೆಯ ಪ್ರಸಾರಣೆಗೇ ಸಹಾಯವಾಯಿತೆಂದು ನೀವು ತಿಳಿಯಬೇಕೆಂಬದಾಗಿ ನಾನು ಅಪೇಕ್ಷಿಸುತ್ತೇನೆ.
1:13b.PHI.001.013 ಹೇಗಂದರೆ ನನ್ನ ಬೇಡಿಗಳು ಕ್ರಿಸ್ತನ ನಿಮಿತ್ತವೇ ಎಂದು ಎಲ್ಲಾ ಅರಮನೆಯಲ್ಲಿಯೂ ಮಿಕ್ಕಾದ ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು.
1:14b.PHI.001.014 ಇದಲ್ಲದೆ ಕರ್ತನಲ್ಲಿ ಅನೇಕ ಸಹೋದರರು ನನ್ನ ಬೇಡಿಗ ಳಿಂದಲೇ ಭರವಸವುಳ್ಳವರಾಗಿ ವಾಕ್ಯವನ್ನು ನಿರ್ಭಯ ದಿಂದ ಹೇಳುವದಕ್ಕೆ ಇನ್ನೂ ವಿಶೇಷ ಧೈರ್ಯವನ್ನು ಹೊಂದಿದ್ದಾರೆ.
1:15b.PHI.001.015 ಕೆಲವರು ಹೊಟ್ಟೇಕಿಚ್ಚುಪಟ್ಟು ಭೇದ ಹುಟ್ಟಿಸಬೇಕೆಂಬ ಭಾವನೆಯಿಂದ ಬೇರೆ ಕೆಲವರು ಒಳ್ಳೇಭಾವದಿಂದ ಕ್ರಿಸ್ತನನ್ನು ಪ್ರಚುರಪಡಿಸುತ್ತಾರೆ.
1:16b.PHI.001.016 ಆ ಬೇರೆ ತರದವರಾದರೋ ನನ್ನ ಬೇಡಿಗಳಿಗೆ ಸಂಕಟವನ್ನು ಕೂಡಿಸಬೇಕೆಂದು ಯೋಚಿಸಿ ಕ್ರಿಸ್ತನನ್ನು ಯಥಾರ್ಥವಾಗಿ ಪ್ರಸಿದ್ಧಪಡಿಸದೆ ಕಕ್ಷೀಭಾವದಿಂದ ಪ್ರಸಿದ್ದಿಪಡಿಸುತ್ತಾರೆ.
1:17b.PHI.001.017 ಇವರಾದರೋ ನಾನು ಸುವಾರ್ತೆಯ ಪರವಾಗಿ ನೇಮಿಸಲ್ಪಟ್ಟಿದ್ದೇನೆಂದು ತಿಳಿದು ಪ್ರೀತಿಯಿಂದ ಸಾರುತ್ತಾರೆ.
1:18b.PHI.001.018 ಹೇಗಾದರೇನು? ಯಾವ ರೀತಿಯಿಂದಾದರೂ ಅಂದರೆ ಕಪಟದಿಂದಾ ಗಲಿ ಇಲ್ಲವೆ ಸತ್ಯದಿಂದಾಗಲಿ ಕ್ರಿಸ್ತನನ್ನು ಪ್ರಸಿದ್ಧಿಪಡಿ ಸುವದುಂಟು; ಇದಕ್ಕೆ ನಾನು ಸಂತೋಷಿಸುತ್ತೇನೆ ಹೌದು, ಮುಂದೆಯೂ ಸಂತೋಷಿಸುವೆನು.
1:19b.PHI.001.019 ನಿಮ್ಮ ಪ್ರಾರ್ಥನೆಯಿಂದಲೂ ಯೇಸು ಕ್ರಿಸ್ತನ ಆತ್ಮನ ಸಹಾಯ ದಿಂದಲೂ ಇದು ನನ್ನ ರಕ್ಷಣೆಗೆ ಪರಿಣಮಿಸುವದೆಂದು ನಾನು ಬಲ್ಲೆನು.
1:20b.PHI.001.020 ಹೇಗೆಂದರೆ, ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯೂ ನಿರೀಕ್ಷೆಯೂ ಉಂಟು.
1:21b.PHI.001.021 ನನಗಂತೂ ಬದುಕುವದೆಂದರೆ ಕ್ರಿಸ್ತನೇ, ಸಾಯು ವದು ಲಾಭವೇ.
1:22b.PHI.001.022 ಶರೀರದಲ್ಲಿಯೇ ಬದುಕಬೇಕಾ ದಲ್ಲಿ ಕೆಲಸಮಾಡಿ ಫಲಹೊಂದಲು ನನಗೆ ಅನುಕೂಲ ವಾಗುವದು. ಹೀಗಿರಲಾಗಿ ನಾನು ಯಾವದನ್ನಾರಿಸಿಕೊಳ್ಳಬೇಕೋ ನನಗೆ ತೋರದು;
1:23b.PHI.001.023 ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೋಗಿಬಿಟ್ಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬದೇ ನನ್ನ ಅಭಿಲಾಷೆ, ಅದು ಉತ್ತಮೋತ್ತಮ
1:24b.PHI.001.024 ಆದಾಗ್ಯೂ ನಾನಿನ್ನೂ ಶರೀರದಲ್ಲಿ ವಾಸಮಾಡಿಕೊಂಡಿರುವದು ನಿಮ ಗೋಸ್ಕರ ಬಹು ಅವಶ್ಯವಾದದ್ದು.
1:25b.PHI.001.025 ಆದದರಿಂದ ನಿಮಗೆ ನಂಬಿಕೆಯಲ್ಲಿ ಅಭಿವೃದ್ಧಿಯೂ ಸಂತೋಷವೂ ಉಂಟಾಗುವದಕ್ಕೋಸ್ಕರ ನಾನು ಜೀವದಿಂದುಳಿದು ನಿಮ್ಮೆಲ್ಲರ ಬಳಿಯಲ್ಲಿರುವೆನೆಂದು ದೃಢವಾಗಿ ನಂಬಿ ದ್ದೇನೆ.
1:26b.PHI.001.026 ಹೀಗೆ ನಾನು ತಿರಿಗಿ ನಿಮ್ಮ ಬಳಿಗೆ ಬರುವದರಿಂದ ನನ್ನ ವಿಷಯವಾದ ನಿಮ್ಮ ಸಂತೋಷವು ಯೇಸು ಕ್ರಿಸ್ತನಲ್ಲಿ ನಮಗೆ ಅತ್ಯಧಿಕವಾಗಿರುವದು.
1:27b.PHI.001.027 ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿ ದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ಒಂದೇ ಆತ್ಮದಲ್ಲಿ ದೃಢ ವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೊಸ್ಕರ ಐಕ್ಯಮತ್ಯದಿಂದಲೂ ಒಂದೇ ಮನಸ್ಸಿನಿಂದಲೂ ಹೆ
1:28b.PHI.001.028 ಯಾವ ವಿಷಯದಲ್ಲಿಯಾದರೂ ನಿಮ್ಮ ವಿರೋದಿಗಳಿಗೆ ಭಯಪಡಬೇಡಿರಿ; ನೀವು ಭಯಪಡ ದಿರುವದು ಅವರಿಗೆ ನಾಶನಕ್ಕಾಗಿಯೂ ನಿಮಗೆ ರಕ್ಷಣೆ ಗಾಗಿಯೂ ದೇವರಿಂದಾದ ಪ್ರಮಾಣವಾಗಿದೆ.
1:29b.PHI.001.029 ಹೇಗೆಂದರೆ ಕ್ರಿಸ್ತನ ಮೇಲೆ ನಂಬಿಕೆಯಿಡುವದೂ ಆತನಿಗೋಸ್ಕರ ಬಾಧೆಯನ್ನನುಭವಿಸುವದೂ ಆತನ ಪರವಾಗಿ ನಿಮಗೆ ಅನುಗ್ರಹವಾಗಿ ದೊರೆಯಿತು.ಹೀಗೆ ನೀವು ನನ್ನಲ್ಲಿ ಕಂಡಂಥ ಮತ್ತು ಈಗ ನನ್ನಲ್ಲಿರುವದೆಂದು ನೀವು ಕೇಳುವಂಥ ಹೋರಾಟವೇ ನಿಮಗುಂಟು.
1:30b.PHI.001.030 ಹೀಗೆ ನೀವು ನನ್ನಲ್ಲಿ ಕಂಡಂಥ ಮತ್ತು ಈಗ ನನ್ನಲ್ಲಿರುವದೆಂದು ನೀವು ಕೇಳುವಂಥ ಹೋರಾಟವೇ ನಿಮಗುಂಟು.
2
2:1b.PHI.002.001 ಕ್ರಿಸ್ತನಲ್ಲಿ ಆದರಣೆ, ಪ್ರೀತಿಯ ಸಂತೈಸುವಿಕೆ, ಆತ್ಮನ ಅನ್ಯೋನ್ಯತೆ, ದಯಾ ವಾತ್ಸಲ್ಯಗಳು ಇರುವದಾದರೆ
2:2b.PHI.002.002 ಐಕ್ಯಮತ್ಯವುಳ್ಳವ ರಾಗಿದ್ದು ನನ್ನ ಸಂತೋಷವನ್ನು ಪರಿಪೂರ್ಣ ಮಾಡಿರಿ. ನಿಮ್ಮೆಲ್ಲರಲ್ಲಿ ಒಂದೇ ಪ್ರೀತಿಯಿರಲಿ; ಅನ್ಯೋ ನ್ಯತೆಯುಳ್ಳವರೂ ಒಂದೇ ಮನಸ್ಸಿನವರೂ ಆಗಿರ್ರಿ.
2:3b.PHI.002.003 ಕಲಹದಿಂದಾಗಲಿ ಒಣ ಹೆಮ್ಮೆಯಿಂದಾಗಲಿ ಯಾವ ದನ್ನೂ ಮಾಡದೆ ಪ್ರತಿಯೊಬ್ಬನು ದೀನ ಮನಸ್ಸಿನಿಂದ ಬೇರೆಯವರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.
2:4b.PHI.002.004 ಪ್ರತಿಯೊಬ್ಬನು ಸ್ವಹಿತವನ್ನು ಮಾತ್ರ ನೋಡದೆ ಪರಹಿತವನ್ನು ಸಹ ನೋಡಲಿ.
2:5b.PHI.002.005 ಕ್ರಿಸ್ತ ಯೇಸುವಿನಲ್ಲಿದ್ದ ಮನಸ್ಸೇ ನಿಮ್ಮಲ್ಲಿ ಇರಲಿ.
2:6b.PHI.002.006 ಆತನು ದೇವಸ್ವರೂಪ ನಾಗಿದ್ದರೂ ದೇವರಿಗೆ ಸರಿಸಮಾನನಾಗಿರುವೆನೆಂದಿಣಿ ಸದೆ
2:7b.PHI.002.007 ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡಾಗ ಮನುಷ್ಯರ ಹೋಲಿಕೆ ಯಲ್ಲಿ ಮಾಡಲ್ಪಟ್ಟನು.
2:8b.PHI.002.008 ಹೀಗೆ ಆತನು ಆಕಾರದಲ್ಲಿ ಮನುಷ್ಯನಾಗಿ ಕಾಣಿಸಿಕೊಂಡಾಗ ತನ್ನನ್ನು ತಗ್ಗಿಸಿ ಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣ ವನ್ನಾದರೂ ಹೊಂದುವಷ್ಟು ವಿಧೇಯನಾದನು.
2:9b.PHI.002.009 ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.
2:10b.PHI.002.010 ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.
2:11b.PHI.002.011 ತಂದೆಯಾದ ದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತನೆಂದು ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವದು.
2:12b.PHI.002.012 ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ಯಾವಾ ಗಲೂ ವಿಧೇಯರಾದಂತೆ ಈಗಲೂ ವಿಧೇಯರಾಗಿ ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರು ವಾಗಲೂ ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ಸ್ವಂತ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.
2:13b.PHI.002.013 ತನ್ನ ಸುಚಿತ್ತದ ಪ್ರಕಾರ ನಿಮ್ಮಲ್ಲಿ ಉದ್ದೇಶವನ್ನೂ ಕಾರ್ಯ ವನ್ನೂ ಸಾಧಿಸುವಾತನು ದೇವರೇ.
2:14b.PHI.002.014 ಗುಣಗುಟ್ಟದೆ ಯೂ ವಿವಾದವಿಲ್ಲದೆಯೂ ಎಲ್ಲವನ್ನು ಮಾಡಿರಿ.
2:15b.PHI.002.015 ಹೀಗೆ ನೀವು ದೋಷವಿಲ್ಲದವರೂ ಕೇಡುಮಾಡ ದವರೂ ನಿಂದಾರಹಿತರೂ ಆದ ದೇವಪುತ್ರರಾಗಿ ವಕ್ರವುಳ್ಳ ದುಷ್ಟಜನಾಂಗದ ಮಧ್ಯದಲ್ಲಿ ಜೀವದಾಯಕ ವಾಕ್ಯವನ್ನು ಹಿಡುಕೊಂಡು ಲೋಕದಲ್ಲಿ ಬೆಳಕುಗಳಂತೆ ಹೊಳೆಯುವವರಾಗಿದ್ದೀರಿ.
2:16b.PHI.002.016 ಹೀಗೆ ನಾನು ಕೆಲಸ ಸಾಧಿಸಿದ್ದೂ ಪ್ರಯಾಸಪಟ್ಟದ್ದೂ ವ್ಯರ್ಥವಾಗಲಿಲ್ಲ ವೆಂದು ತಿಳಿದು ಕ್ರಿಸ್ತನ ದಿನದಲ್ಲಿ ಸಂತೋಷಪಡುವೆನು.
2:17b.PHI.002.017 ಹೌದು, ನಿಮ್ಮ ನಂಬಿಕೆಯೆಂಬ ಯಜ್ಞವನ್ನು ಅರ್ಪಿಸುವ ಸೇವೆಯಲ್ಲಿ ನಾನೇ ಅರ್ಪಿತವಾಗ ಬೇಕಾದರೂ ನಾನು ಹರ್ಷಗೊಂಡು ನಿಮ್ಮೆಲ್ಲರ ಕೂಡ ಸಂತೋಷಿಸುವೆನು.
2:18b.PHI.002.018 ಈ ಕಾರಣಕ್ಕಾಗಿಯೇ ನೀವು ಆನಂದಿಸಿರಿ, ನನ್ನೊಂದಿಗೆ ಸಂತೊಷಪಡಿರಿ.
2:19b.PHI.002.019 ನಾನು ತಿಮೊಥೆಯನನ್ನು ಬೇಗನೆ ನಿಮ್ಮ ಬಳಿಗೆ ಕಳುಹಿಸುವದಕ್ಕೆ ಕರ್ತನಾದ ಯೇಸುವಿನಲ್ಲಿ ನಿರೀಕ್ಷಿಸುತ್ತೇನೆ. ಅವನ ಮುಖಾಂತರ ನಿಮ್ಮ ವಿಷಯವನ್ನು ತಿಳಿದು ನಾನು ಸಹ ಆದರಣೆಹೊಂದೇನು.
2:20b.PHI.002.020 ಅವನ ಹಾಗೆ ನಿಮ್ಮ ಕಾರ್ಯಗಳನ್ನು ಕುರಿತು ಸ್ವಾಭಾವಿಕವಾಗಿ ಚಿಂತಿಸುವವರು ನನ್ನ ಬಳಿಯಲ್ಲಿ ಬೇರೆ ಯಾರೂ ಇಲ್ಲ.
2:21b.PHI.002.021 ಎಲ್ಲರೂ ಸ್ವಕಾರ್ಯಗಳ ಮೇಲೆ ಮನಸ್ಸಿಡು ತ್ತಾರೆಯೇ ಹೊರತು ಯೇಸು ಕ್ರಿಸ್ತನ ಕಾರ್ಯಗಳ ಮೇಲೆ ಮನಸ್ಸಿಡುವದಿಲ್ಲ.
2:22b.PHI.002.022 ಆದರೆ ಅವನನ್ನು ನೀವು ಪರೀಕ್ಷಿಸಿ ತಿಳಿದುಕೊಂಡಿದ್ದೀರಿ. ಮಗನು ತಂದೆಗೆ ಹೇಗೋ ಹಾಗೆಯೇ ಅವನು ಸುವಾರ್ತೆಯಲ್ಲಿ ನನ್ನೊಂದಿಗೆ ಸೇವೆ ಮಾಡಿದ್ದಾನೆ.
2:23b.PHI.002.023 ಆದದರಿಂದ ನನ್ನ ಸಂಗತಿಯು ಹೇಗಾಗುವದೋ ಅದನ್ನು ತಿಳಿದ ಕೂಡಲೆ ಅವನನ್ನು ಕಳುಹಿಸುವದಕ್ಕೆ ನಿರೀಕ್ಷಿಸುತ್ತೇನೆ.
2:24b.PHI.002.024 ಇದಲ್ಲದೆ ನಾನು ಸಹ ಬೇಗನೆ ಬರುವೆನೆಂದು ಕರ್ತನಲ್ಲಿ ದೃಢವಾಗಿ ನಂಬಿದ್ದೇನೆ.
2:25b.PHI.002.025 ಆದಾಗ್ಯೂ ನನ್ನ ಕೊರತೆಯನ್ನು ನೀಗುವದಕ್ಕೆ ನೀವು ಕಳುಹಿಸಿದಂಥ ನನ್ನ ಸಹೋದರನೂ ಜೊತೆ ಕೆಲಸದವನೂ ಸಹ ಭಟನೂ ಆಗಿರುವ ಎಪಫ್ರೊದೀತನನ್ನು ನಿಮ್ಮ ಬಳಿಗೆ ಕಳುಹಿಸುವದು ಅವಶ್ಯವೆಂದು ನಾನು ನೆನಸಿದ್ದೇನೆ.
2:26b.PHI.002.026 ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದನು, ತಾನು ಅಸ್ವಸ್ಥನಾಗಿದ್ದ ವರ್ತಮಾನವನ್ನು ನೀವು ಕೇಳಿದ್ದರಿಂದ ತುಂಬಾ ವ್ಯಸನಪಟ್ಟನು.
2:27b.PHI.002.027 ಅವನು ರೋಗದಲ್ಲಿ ಬಿದ್ದು ಸಾಯುವಹಾಗಿದ್ದನೆಂಬದು ನಿಜವೇ. ಆದರೆ ದೇವರು ಅವನನ್ನು ಕರುಣಿಸಿದನು; ಅವನನ್ನು ಮಾತ್ರವಲ್ಲದೆ ನನಗೆ ದುಃಖದ ಮೇಲೆ ದುಃಖ ಬಾರದಂತೆ ನನ್ನನ್ನೂ ಕರುಣಿಸಿದನು.
2:28b.PHI.002.028 ಆದದ ರಿಂದ ನೀವು ಅವನನ್ನು ನೋಡಿ ತಿರಿಗಿ ಸಂತೋಷಪಡ ಬೇಕೆಂತಲೂ ನನಗೆ ಕೂಡ ದುಃಖವು ಕಡಿಮೆಯಾಗ ಬೇಕೆಂತಲೂ ನಾನು ಅವನನ್ನು ಬಹಳ ಜಾಗ್ರತೆಯಿಂದ ಕಳುಹಿಸಿದ್ದೇನೆ.
2:29b.PHI.002.029 ಆದದರಿಂದ ನೀವು ಅವನನ್ನು ಪೂರ್ಣ ಸಂತೋಷದಿಂದ ಕರ್ತನಲ್ಲಿ ಸೇರಿಸಿಕೊಳ್ಳಿರಿ ಮತ್ತು ಅಂಥವರನ್ನು ಸನ್ಮಾನಿಸಿರಿ.ಹೀಗಿರಲಾಗಿ ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕಡಿಮೆಯಾದದ್ದನ್ನು ಪೂರ್ತಿ ಮಾಡುವದಕ್ಕಾಗಿ ಅವನು ಜೀವದ ಆಶೆಯನ್ನು ಲಕ್ಷ್ಯ ಮಾಡದೆ ಕ್ರಿಸ್ತನ ಕೆಲಸದ ನಿಮಿತ್ತ ಸಾಯುವಹಾಗಿದ್ದನು.
2:30b.PHI.002.030 ಹೀಗಿರಲಾಗಿ ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕಡಿಮೆಯಾದದ್ದನ್ನು ಪೂರ್ತಿ ಮಾಡುವದಕ್ಕಾಗಿ ಅವನು ಜೀವದ ಆಶೆಯನ್ನು ಲಕ್ಷ್ಯ ಮಾಡದೆ ಕ್ರಿಸ್ತನ ಕೆಲಸದ ನಿಮಿತ್ತ ಸಾಯುವಹಾಗಿದ್ದನು.
3
3:1b.PHI.003.001 ಕಡೇದಾಗಿ ನನ್ನ ಸಹೋದರರೇ, ಕರ್ತ ನಲ್ಲಿ ಸಂತೋಷಪಡಿರಿ. ತಿರಿಗಿ ನಿಮಗೆ ಬರೆಯುವದರಲ್ಲಿ ನನಗೇನೂ ಬೇಸರವಿಲ್ಲ; ನಿಮ್ಮನ್ನಾ ದರೋ ಅದು ಭದ್ರಪಡಿಸುವದು.
3:2b.PHI.003.002 ನಾಯಿಗಳಿಗೆ ಎಚ್ಚರಿಕೆಯಾಗಿರ್ರಿ; ದುಷ್ಟ ಕೆಲಸದವರಿಗೆ ಎಚ್ಚರಿಕೆ ಯಾಗಿರ್ರಿ. ಅಂಗಚ್ಛೇದನೆಯ ವಿಷಯದಲ್ಲಿ ಎಚ್ಚರಿಕೆ ಯಾಗಿರ್ರಿ.
3:3b.PHI.003.003 ಆತ್ಮದಲ್ಲಿ ದೇವರನ್ನು ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಸಂತೋಷಿಸುವವರೂ ಶರೀರದಲ್ಲಿ ಭರವಸೆಯಿಲ್ಲದವರೂ ಆದ ನಾವೇ ಸುನ್ನತಿಯವರಾಗಿ ದ್ದೇವೆ.
3:4b.PHI.003.004 ನಾನಾದರೋ ಶರೀರ ಸಂಬಂಧವಾದವು ಗಳಲ್ಲಿ ಭರವಸವಿಟ್ಟರೂ ಇಡಬಹುದು, ಬೇರೆ ಯಾವ ನಾದರೂ ಶರೀರ ಸಂಬಂಧವಾದವುಗಳಲ್ಲಿ ಭರವಸವಿಡ ಬಹುದೆಂದು ಯೋಚಿಸುವದಾದರೆ ನಾನು ಅವನಿ ಗಿಂತಲೂ ಹೆಚ್ಚಾಗಿ ಹಾಗೆ ಯೋಚಿಸಬಹುದು.
3:5b.PHI.003.005 ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು; ನಾನು ಇಸ್ರಾಯೇಲ್ ವಂಶದವನು, ಬೆನ್ಯಾವಿಾನನ ಕುಲದವನು, ಇಬ್ರಿಯರಿಂದ ಹುಟ್ಟಿದ ಇಬ್ರಿಯನು; ನ್ಯಾಯಪ್ರಮಾಣವನ್ನು ನೋಡಿದರೆ ನಾನು ಫರಿಸಾ ಯನು;
3:6b.PHI.003.006 ಆಸಕ್ತಿಯನ್ನು ನೋಡಿದರೆ ನಾನು ಸಭೆಯ ಹಿಂಸಕನು, ನ್ಯಾಯಪ್ರಮಾಣದಲ್ಲಿ ಹೇಳಿರುವ ನೀತಿ ಯನ್ನು ನೋಡಿದರೆ ನಾನು ನಿರ್ದೋಷಿ.
3:7b.PHI.003.007 ಆದರೆ ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ.
3:8b.PHI.003.008 ಹೌದು, ನಿಸ್ಸಂದೇಹವಾಗಿ ನನ್ನ ಕರ್ತನಾದ ಕ್ರಿಸ್ತ ಯೇಸುವಿನ ವಿಷಯವಾಗಿರುವ ಅತಿ ಶ್ರೇಷ್ಟವಾದ ಜ್ಞಾನದ ನಿಮಿತ್ತವಾಗಿ ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ನಾನು ಕ್ರಿಸ್ತನನ್ನು ಸಂಪಾದಿಸಿ ಕೊಳ್ಳಬೇಕೆಂದು ಆತನ ನಿಮಿತ್ತ ಎಲ್ಲವನ್ನು ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ.
3:9b.PHI.003.009 ನಾನು ಕ್ರಿಸ್ತನಲ್ಲಿರುವ ವನಾಗಿ ಕಾಣಿಸಿಕೊಳ್ಳಬೇಕೆಂದು ನ್ಯಾಯಪ್ರಮಾಣ ದಿಂದಾಗುವ ಸ್ವನೀತಿಯನ್ನಾಶ್ರಯಿಸದೆ ಆತನನ್ನು ನಂಬು ವದರಿಂದ ದೊರಕುವಂಥ ಅಂದರೆ ನಂಬಿಕೆಯ ಆಧಾರ ದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ದ್ದೇನೆ.
3:10b.PHI.003.010 ಹೀಗೆ ಆತನನ್ನೂ ಆತನ ಪುನರುತ್ಥಾನ ದಲ್ಲಿರುವ ಶಕ್ತಿಯನ್ನೂ ಆತನ ಬಾಧೆಗಳಲ್ಲಿ ಪಾಲುಗಾರ ನಾಗುವದನ್ನೂ ತಿಳಿದುಕೊಂಡು ಆತನ ಮರಣಕ್ಕೆ ಸರೂಪನಾಗುವೆನು.
3:11b.PHI.003.011 ಹೇಗಾದರೂ ಸತ್ತವರಿಗೆ ಆಗುವ ಪುನರುತ್ಥಾನವು ನನಗೆ ಆದೀತು.
3:12b.PHI.003.012 ಇಷ್ಟ ರೊಳಗೆ ನಾನು ಪಡಕೊಂಡು ಸಿದ್ಧಿಗೆ ಬಂದವನೆಂದು ಹೇಳುವದಿಲ್ಲ; ನಾನು ಯಾವದನ್ನು ಹೊಂದುವದಕ್ಕಾಗಿ ಕ್ರಿಸ್ತ ಯೇಸು ನನ್ನನ್ನು ಹಿಡಿದುಕೊಂಡನೊ ಅದನ್ನು ಹಿಡಿದುಕೊಳ್ಳುವದಕ್ಕೋಸ್ಕರ ಹಿಂದಟ್ಟುತ್ತಾ ಇದ್ದೇನೆ.
3:13b.PHI.003.013 ಸಹೋದರರೇ, ನಾನಂತೂ ಹಿಡಿದುಕೊಂಡವ ನೆಂದು ನನ್ನನ್ನು ಎಣಿಸಿಕೊಳ್ಳುವದಿಲ್ಲ; ಆದರೆ ಇದೊಂ ದನ್ನು ಮಾಡುತ್ತೇನೆ, ನಾನು ಹಿಂದಿನ ವಿಷಯಗಳನ್ನು ಮರೆತುಬಿಟ್ಟು ಮುಂದಿನವುಗಳನ್ನು ಹಿಡಿಯುವದಕ್ಕಾಗಿ
3:14b.PHI.003.014 ಕ್ರಿಸ್ತ ಯೇಸುವಿನಲ್ಲಿ ದೇವರ ಉನ್ನತವಾದ ಕರೆಯುವಿಕೆಯ ಬಹುಮಾನವನ್ನು ಗುರಿಮಾಡಿಕೊಂಡು ಓಡುತ್ತಾ ಇದ್ದೇನೆ.
3:15b.PHI.003.015 ಆದದರಿಂದ ನಮ್ಮಲ್ಲಿ ಪರಿ ಪೂರ್ಣರಾದವರು ಇದೇ ಅಭಿಪ್ರಾಯವುಳ್ಳವರಾಗಿ ರೋಣ; ಯಾವದಾದರೂ ಒಂದು ವಿಷಯದಲ್ಲಿ ನೀವು ಬೇರೆ ಅಭಿಪ್ರಾಯವುಳ್ಳವರಾಗಿದ್ದರೆ ಅದನ್ನೂ ದೇವರು ನಿಮಗೆ ತೋರಿಸಿಕೊಡುವನು.
3:16b.PHI.003.016 ಆದಾಗ್ಯೂ ಈಗಾ ಗಲೇ ನಾವು ಯಾವದನ್ನು ಹೊಂದಿಕೊಂಡಿದ್ದೇವೋ ಅದೇ ಸೂತ್ರವನ್ನು ಅನುಸರಿಸಿ ನಡೆದುಕೊಳ್ಳುತ್ತಾ ಒಂದೇ ಮನಸ್ಸುಳ್ಳವರಾಗಿರೋಣ.
3:17b.PHI.003.017 ಸಹೋದರರೇ, ನೀವೆಲ್ಲರೂ ನನ್ನನ್ನು ಅನುಸರಿ ಸುವವರಾಗಿರ್ರಿ; ನಾವು ನಿಮಗೆ ತೋರಿಸಿದ ಮಾದರಿಯ ಪ್ರಕಾರ ನಡೆದುಕೊಳ್ಳುವವರನ್ನು ಗುರುತಿ ಸಿರಿ.
3:18b.PHI.003.018 (ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ನಡೆಯುತ್ತಾರೆ; ಅವರ ವಿಷಯದಲ್ಲಿ ನಾನು ನಿಮಗೆ ಎಷ್ಟೋ ಸಾರಿ ಹೇಳಿದೆನು, ಈಗಲೂ ಅಳುತ್ತಾ ಹೇಳುತ್ತೇನೆ.
3:19b.PHI.003.019 ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು. ಅವರು ಭೂಸಂಬಂಧವಾದವುಗಳ ಮೇಲೆ ಮನಸ್ಸಿಡುತ್ತಾರೆ.)
3:20b.PHI.003.020 ನಾವಾದರೊ ಪರಲೋಕ ನಿವಾಸಿಗಳು; ಅಲ್ಲಿಂದಲೇ ರಕ್ಷಕನು ಬರುವದನ್ನು ಎದುರು ನೋಡುತ್ತಾ ಇದ್ದೇವೆ; ಆತನೇ ಕರ್ತನಾದ ಯೇಸು ಕ್ರಿಸ್ತನು.ಆತನು ಎಲ್ಲವನ್ನೂ ತನಗೆ ಅಧೀನ ಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾ ವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸು ವದಕ್ಕೆ ಶಕ್ತನಾಗಿದ್ದು ಪ್ರಭಾವವುಳ್ಳ ತನ್ನ ದೇಹಕ್ಕೆ ಸಾರೂಪ್ಯವಾಗುವಂತೆ ಮಾಡುವನು.
3:21b.PHI.003.021 ಆತನು ಎಲ್ಲವನ್ನೂ ತನಗೆ ಅಧೀನ ಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾ ವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸು ವದಕ್ಕೆ ಶಕ್ತನಾಗಿದ್ದು ಪ್ರಭಾವವುಳ್ಳ ತನ್ನ ದೇಹಕ್ಕೆ ಸಾರೂಪ್ಯವಾಗುವಂತೆ ಮಾಡುವನು.
4
4:1b.PHI.004.001 ಆದದರಿಂದ ಅತಿಪ್ರಿಯರೂ ಇಷ್ಟವಾದ ವರೂ ಆದ ನನ್ನ ಸಹೋದರರೇ, ನನ್ನ ಸಂತೋಷವೂ ಕಿರೀಟವೂ ಆಗಿರುವ ನನ್ನ ಅತಿ ಪ್ರಿಯರೇ, ಕರ್ತನಲ್ಲಿ ದೃಢವಾಗಿ ನಿಲ್ಲಿರಿ.
4:2b.PHI.004.002 ಕರ್ತನಲ್ಲಿ ಒಂದೇ ಮನಸ್ಸುಳ್ಳವರಾಗಿರಬೇಕೆಂದು ಯುವೊದ್ಯಳನ್ನೂ ಸಂತುಕೆಯನ್ನೂ ಬೇಡಿಕೊಳ್ಳುತ್ತೇನೆ.
4:3b.PHI.004.003 ನಿಜ ಜೊತೆಗಾರನೇ, ನೀನು ಆ ಸ್ತ್ರೀಯರಿಗೆ ಸಹಾಯಕ ನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮೆನ್ಸ್ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಕೂಡ ಸುವಾರ್ತೆಗೋಸ್ಕರ ಪ್ರಯಾಸ ಪಟ್ಟವರು. ಅವರ ಹೆಸರುಗಳು ಜೀವಗ್ರಂಥದಲ್ಲಿ ಬರೆದವೆ.
4:4b.PHI.004.004 ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ; ಸಂತೋಷಪಡಿರಿ ಎಂದು ನಾನು ತಿರಿಗಿ ಹೇಳುತ್ತೇನೆ.
4:5b.PHI.004.005 ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ; ಕರ್ತನು ಹತ್ತಿರವಾಗಿದ್ದಾನೆ.
4:6b.PHI.004.006 ಯಾವ ಸಂಬಂಧ ವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆ ಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯ ಪಡಿಸಿರಿ.
4:7b.PHI.004.007 ಆಗ ಎಲ್ಲಾ ಗ್ರಹಿಕೆಯನ್ನೂ ವಿಾರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ ಮನಸ್ಸು ಗಳನ್ನೂ ಕ್ರಿಸ್ತ ಯೇಸುವಿನ ಮೂಲಕ ಕಾಯುವದು.
4:8b.PHI.004.008 ಕಡೇದಾಗಿ ಸಹೋದರರೇ, ಸತ್ಯವಾದವುಗಳು ಯಾವವೋ ಪ್ರಾಮಾಣಿಕವಾದವುಗಳು ಯಾವವೋ ನ್ಯಾಯವಾದವುಗಳು ಯಾವವೋ ಶುದ್ಧವಾದವುಗಳು ಯಾವವೋ ಪ್ರೀತಿಕರವಾದವುಗಳು ಯಾವವೋ ಮಾನ್ಯವಾದವುಗಳು ಯಾವವೋ ಅವುಗಳನ್ನು ಮತ್ತು ಸದ್ಗುಣವನ್ನೂ ಸ್ತುತ್ಯವಾದದ್ದನ್ನೂ ಯೊ
4:9b.PHI.004.009 ನೀವು ಯಾವದನ್ನು ನನ್ನಿಂದ ಕಲಿತು ಹೊಂದಿದಿರೋ ಮತ್ತು ಯಾವದನ್ನು ನನ್ನಲ್ಲಿ ಕೇಳಿಕಂಡಿರೋ ಅದನ್ನೇ ಮಾಡುತ್ತಾ ಬನ್ನಿರಿ. ಆಗ ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು.
4:10b.PHI.004.010 ಈಗಲಾದರೋ ನನ್ನ ವಿಷಯವಾದ ನಿಮ್ಮ ಯೋಚನೆಯು ನಿಮ್ಮಲ್ಲಿ ಪುನಃ ಚಿಗುರಿದ್ದಕ್ಕೆ ನಾನು ಕರ್ತನಲ್ಲಿ ಬಹಳವಾಗಿ ಸಂತೋಷಪಟ್ಟೆನು. ಈ ವಿಷಯ ದಲ್ಲಿ ನೀವು ಯೋಚನೆಯುಳ್ಳವರಾಗಿದ್ದರೂ ನಿಮಗೆ ಸಂದರ್ಭ ಸಿಕ್ಕಲಿಲ್ಲವೇನೋ.
4:11b.PHI.004.011 ಕೊರತೆಯಲ್ಲಿದ್ದೇ ನೆಂದು ನಾನು ಇದನ್ನು ಹೇಳುವದಿಲ್ಲ; ನಾನಂತೂ ಇದ್ದ ಸ್ಥಿತಿಯಲ್ಲಿಯೇ ಸಂತುಷ್ಟನಾಗಿರುವದನ್ನು ಕಲಿತು ಕೊಂಡಿದ್ದೇನೆ.
4:12b.PHI.004.012 ನಾನು ಬಡವನಾಗಿರಲೂ ಬಲ್ಲೆನು, ಸಮೃದ್ಧಿಯುಳ್ಳವನಾಗಿರಲೂ ಬಲ್ಲೆನು, ನಾನು ತೃಪ್ತನಾಗಿ ದ್ದರೂ ಹಸಿದವನಾಗಿದ್ದರೂ ಸಮೃದ್ಧಿಯುಳ್ಳವನಾದರೂ ಕೊರತೆಯುಳ್ಳವನಾದರೂ ಯಾವ ತರದ ಸ್ಥಿತಿಯಲಿರುವವನಾದರೂ ಅವೆಲ್ಲವುಗಳನ್ನು ನಾನು ಕಲಿತು ಕೊಂಡಿದ್ದೇನೆ.
4:13b.PHI.004.013 ನನ್ನನ್ನು ಬಲಪಡಿಸುವ ಕ್ರಿಸ್ತನ ಮೂಲಕ ನಾನು ಎಲ್ಲವುಗಳನ್ನು ಮಾಡಬಲ್ಲೆನು.
4:14b.PHI.004.014 ಹೀಗಿದ್ದರೂ ನೀವು ನನ್ನ ಸಂಕಟದಲ್ಲಿ ಪಾಲುಗಾರ ರಾಗಿದ್ದದ್ದು ಒಳ್ಳೇದಾಯಿತು.
4:15b.PHI.004.015 ಇದಲ್ಲದೆ ಫಿಲಿಪ್ಪಿ ಯವರೇ, ಸುವಾರ್ತೆಯ ಪ್ರಾರಂಭದಲ್ಲಿ ನಾನು ಮಕೆದೋನ್ಯದಿಂದ ಹೊರಟಾಗ ಕೊಡುವದರ ಮತ್ತು ತೆಗೆದುಕೊಳ್ಳುವದರ ವಿಷಯದಲ್ಲಿ ನಿಮ್ಮ ಹೊರತು ಬೇರೆ ಸಭೆಯು ನನ್ನೊಂದಿಗೆ ಭಾಗವಹಿಸಲಿಲ್ಲವೆಂದು ನೀವು ಸಹ ಬಲ್ಲಿರಿ.
4:16b.PHI.004.016 ನಾನು ಥೆಸಲೋನಿಕದಲ್ಲಿ ದ್ದಾಗಲೂ ನೀವು ಕೆಲವು ಸಾರಿ ನನ್ನ ಕೊರತೆಯನ್ನು ನೀಗಿಸುವದಕ್ಕೆ ಕೊಟ್ಟು ಕಳುಹಿಸಿದಿರಲ್ಲಾ.
4:17b.PHI.004.017 ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವೆನೆಂತಲ್ಲ ಆದರೆ ನಿಮ್ಮ ಲೆಕ್ಕಕ್ಕೆ ಸಮೃದ್ಧಿಯಾದ ಫಲವನ್ನೇ ಅಪೇಕ್ಷಿಸು ತ್ತೇನೆ. ಆದರೆ ಬೇಕಾದದ್ದೆಲ್ಲ ನನಗುಂಟು, ಸಮೃದ್ಧಿ ಯಾಯಿತು.
4:18b.PHI.004.018 ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆ ಯಾದದ್ದು; ಸುಗಂಧವಾಸನೆಯೇ, ಇಷ್ಟಯಜ್ಞವೇ
4:19b.PHI.004.019 ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿ ಯೊಂದು ಕೊರತೆಯನ್ನು ನೀಗಿಸುವನು.
4:20b.PHI.004.020 ನಮ್ಮ ತಂದೆಯೂ ದೇವರೂ ಆಗಿರುವಾತನಿಗೆ ಯುಗ ಯುಗಾಂತರಗಳಲ್ಲಿಯೂ ಮಹಿಮೆ ಇರಲಿ. ಆಮೆನ್.
4:21b.PHI.004.021 ಕ್ರಿಸ್ತ ಯೇಸುವಿನಲ್ಲಿ ಪ್ರತಿಯೊಬ್ಬ ಪರಿಶುದ್ಧನಿಗೆ ವಂದನೆ. ನನ್ನ ಜೊತೆಯಲ್ಲಿರುವ ಸಹೋದರರು ನಿಮ್ಮನ್ನು ವಂದಿಸುತ್ತಾರೆ.
4:22b.PHI.004.022 ಪರಿಶುದ್ದರೆಲ್ಲರೂ ನಿಮ್ಮನ್ನು ವಂದಿಸುತ್ತಾರೆ. ಮುಖ್ಯವಾಗಿ ಕೈಸರನ ಮನೆಯವರು ನಿಮ್ಮನ್ನು ವಂದಿಸುತ್ತಾರೆ;ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗಿರಲಿ. ಆಮೆನ್.
4:23b.PHI.004.023 ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗಿರಲಿ. ಆಮೆನ್.
- Holder of rights
- Multilingual Bible Corpus
- Citation Suggestion for this Object
- TextGrid Repository (2025). Kannada Collection. Philippians (Kannada). Philippians (Kannada). Multilingual Parallel Bible Corpus. Multilingual Bible Corpus. https://hdl.handle.net/21.11113/0000-0016-A204-C