1 Timothy (Kannada)

1 Timothy (Kannada)

1

1:1b.1TI.001.001 ನಮ್ಮ ರಕ್ಷಕನಾದ ದೇವರ ಮತ್ತು ನಮ್ಮ ನಿರೀಕ್ಷೆಯಾಗಿರುವ ಕರ್ತನಾದ ಯೇಸು ಕ್ರಿಸ್ತನ ಆಜ್ಞಾನುಸಾರ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನು

1:2b.1TI.001.002 ನಂಬಿಕೆಯ ವಿಷಯದಲ್ಲಿ ನನ್ನ ಸ್ವಂತಮಗನಾಗಿರುವ ತಿಮೊಥೆಯನಿಗೆ ನಮ್ಮ ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.

1:3b.1TI.001.003 ನಾನು ಮಕೆದೋನ್ಯಕ್ಕೆ ಹೋದಾಗ ನೀನು ಎಫೆಸ ದಲ್ಲಿ ಇದ್ದುಕೊಂಡು ಅವರು ಬೇರೆ ಯಾವ ಬೋಧನೆ ಯನ್ನು ಉಪದೇಶಿಸಬಾರದೆಂತಲೂ

1:4b.1TI.001.004 ಕಲ್ಪನಾ ಕಥೆ ಗಳಿಗೂ ಕೊನೆಯಿಲ್ಲದ ವಂಶಾವಳಿಗಳಿಗೂ ಲಕ್ಷ್ಯ ಕೊಡಬಾರದೆಂತಲೂ ಆಜ್ಞಾಪಿಸಬೇಕೆಂಬದಾಗಿ ನಾನು ನಿನಗೆ ಖಂಡಿತವಾಗಿ ಹೇಳಿದ ಪ್ರಕಾರ ಈಗಲೂ ಹೇಳುತ್ತೇನೆ. ಅಂಥ ಕಥೆಗಳೂ ವಂಶಾವಳಿಗಳೂ ವಿವಾದಕ್ಕೆ ಆಸ್ಪದವಾಗಿವೆಯೇ ಹೊರತು ನಂಬಿಕೆ ಯಿಂದುಂಟಾಗುವ ದೈವಭಕ್ತಿಯನ್ನು ವೃದ್ಧಿಮಾಡುವ

1:5b.1TI.001.005 ಶುದ್ಧ ಹೃದಯದಿಂದಲೂ ಒಳ್ಳೇಮನಸ್ಸಾಕ್ಷಿ ಯಿಂದಲೂ ನಿಷ್ಕಪಟವಾದ ನಂಬಿಕೆಯಿಂದಲೂ ಉಂಟಾಗುವ ಪ್ರೀತಿಯೇ ಆಜ್ಞೆಯ ಅಂತ್ಯವಾಗಿದೆ.

1:6b.1TI.001.006 ಕೆಲವರು ಈ ಗುರಿ ತಪ್ಪಿ ವ್ಯರ್ಥವಾದ ವಿಚಾರ ಗಳಿಗೆ ತಿರುಗಿಕೊಂಡಿದ್ದಾರೆ;

1:7b.1TI.001.007 ಅವರು ನ್ಯಾಯ ಪ್ರಮಾಣದ ಉಪದೇಶಕರಾಗಿರಬೇಕೆಂದಿದ್ದರೂ ತಾವು ಹೇಳುವದಾಗಲೀ ತಾವು ದೃಢವಾಗಿ ಮಾತನಾಡುವ ವಿಷಯವಾಗಲೀ ಇಂಥದ್ದೆಂದು ತಿಳಿಯದವರಾಗಿ ದ್ದಾರೆ.

1:8b.1TI.001.008 ಒಬ್ಬನು ನ್ಯಾಯಪ್ರಮಾಣವನ್ನು ನ್ಯಾಯ ಸಮ್ಮತವಾಗಿ ಉಪಯೋಗಿಸುವದಾದರೆ ಅದು ಒಳ್ಳೇ ದೆಂದು ನಾವು ಬಲ್ಲೆವು.

1:9b.1TI.001.009 ನ್ಯಾಯಪ್ರಮಾಣವು ನೀತಿ ವಂತರಿಗೋಸ್ಕರ ಅಲ್ಲ, ಆದರೆ ಅದು ಅಕ್ರಮ ಗಾರರಿಗೂ ಅವಿಧೇಯರಿಗೂ ಭಕ್ತಿಹೀನರಿಗೂ ಪಾಪಿಷ್ಠ ರಿಗೂ ಅಶುದ್ಧರಿಗೂ ಅಪವಿತ್ರಮಾಡುವವರಿಗೂ ತಂದೆತಾಯಿಗಳನ್ನು ಕೊಲ್ಲುವವರಿಗೂ ನರಹತ್ಯ ಮಾಡುವವರಿಗೂ

1:10b.1TI.001.010 ಜಾರರಿಗೂ ಪುರುಷಗಾಮಿ ಗಳಿಗೂ ನರಚೋರರಿಗೂ ಸುಳ್ಳುಗಾರರಿಗೂ ಅಬದ್ಧ ಪ್ರಮಾಣಿಕರಿಗೂ ಸ್ವಸ್ಥಬೋಧನೆಗೆ ಪ್ರತಿಕೂಲವಾಗಿ ಬೇರೆ ಏನಾದರೂ ಇದ್ದರೆ ಅದನ್ನು ಮಾಡುವವರಿಗೂ ನೇಮಕ ವಾಗಿದೆಯೆಂದು ನಮಗೆ ತಿಳಿದದೆ.

1:11b.1TI.001.011 ಈ ಬೋಧನೆಯು ಸ್ತುತ್ಯನಾದ ದೇವರ ಮಹಿಮೆಯ ಸುವಾರ್ತೆಗೆ ಅನುಸಾರವಾಗಿದೆ. ಈ ಸುವಾರ್ತೆಯು ನನ್ನ ವಶಕ್ಕೆ ಕೊಡಲ್ಪಟ್ಟಿತು.

1:12b.1TI.001.012 ನನಗೆ ಬಲವನ್ನು ದಯಪಾಲಿಸಿದಾತನು ನಮ್ಮ ಕರ್ತನಾದ ಕ್ರಿಸ್ತ ಯೇಸುವೇ; ಆತನು ನನ್ನನ್ನು ನಂಬಿಗಸ್ತನೆಂದು ಎಣಿಸಿ ಈ ಸೇವೆಯಲ್ಲಿ ನೇಮಿಸಿ ಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರ ಸಲ್ಲಿಸುತ್ತೇನೆ.

1:13b.1TI.001.013 ಮೊದಲು ದೇವದೂಷಕನೂ ಹಿಂಸಕನೂ ಕೇಡು ಮಾಡುವವನೂ ಆಗಿದ್ದ ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು.

1:14b.1TI.001.014 ನಮ್ಮ ಕರ್ತನ ಕೃಪೆಯು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆ ಮತ್ತು ಪ್ರೀತಿಯೊಂದಿಗೆ ಅತ್ಯಧಿಕವಾಯಿತು.

1:15b.1TI.001.015 ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂದು ಹೇಳುವದು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು.

1:16b.1TI.001.016 ಹೇಗಿದ್ದರೂ ಇನ್ನು ಮುಂದೆ ನಿತ್ಯ ಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ ದೃಷ್ಟಾಂತವಿರಬೇಕೆಂದು ಯೇಸು ಕ್ರಿಸ್ತನು ಮೊದಲು ನನ್ನನ್ನು ಕರುಣಿಸಿ ನನ್ನಲ್ಲಿ ತನ್ನ ಪೂರ್ಣದೀರ್ಘ ಶಾಂತಿಯನ್ನು ತೋರ್ಪಡಿಸಿದನು.

1:17b.1TI.001.017 ನಿತ್ಯನಾದ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಜ್ಞಾನಿಯಾದ ಒಬ್ಬನೇ ದೇವರಿಗೆ ಘನವೂ ಮಹಿಮೆಯೂ ಎಂದೆಂದಿಗೂ ಇರಲಿ. ಆಮೆನ್‌.

1:18b.1TI.001.018 ಮಗನಾದ ತಿಮೊಥೆಯನೇ, ನಿನ್ನ ವಿಷಯದಲ್ಲಿ ಮುಂಚೆ ಉಂಟಾದ ಪ್ರವಾದನೆಗಳ ಪ್ರಕಾರ ನೀನು ಅವುಗಳಿಂದ ಒಳ್ಳೇ ಯುದ್ಧವನ್ನು ನಡಿಸಬೇಕೆಂದು ನಿನಗೆ ಆಜ್ಞಾಪಿಸುತ್ತೇನೆ.

1:19b.1TI.001.019 ನಂಬಿಕೆಯನ್ನೂ ಒಳ್ಳೇ ಮನಸ್ಸಾಕ್ಷಿಯನ್ನೂ ಹಿಡಿದುಕೋ; ಕೆಲವರು ನಂಬಿಕೆ ಯನ್ನು ತಳ್ಳಿಬಿಟ್ಟು ಅದರ ವಿಷಯದಲ್ಲಿ ಹಡಗು ಒಡೆದ ವರಂತೆ ಇದ್ದಾರೆ;ಹುಮೆನಾಯನೂ ಅಲೆಕ್ಸಾಂದ ರನೂ ಅವರಲ್ಲಿದ್ದಾರೆ. ಇವರು ದೇವದೂಷಣೆ ಮಾಡ ಬಾರದೆಂಬದನ್ನು ಕಲಿತುಕೊಳ್ಳುವಂತೆ ನಾನು ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.

1:20b.1TI.001.020 ಹುಮೆನಾಯನೂ ಅಲೆಕ್ಸಾಂದ ರನೂ ಅವರಲ್ಲಿದ್ದಾರೆ. ಇವರು ದೇವದೂಷಣೆ ಮಾಡ ಬಾರದೆಂಬದನ್ನು ಕಲಿತುಕೊಳ್ಳುವಂತೆ ನಾನು ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.

2

2:1b.1TI.002.001 ಎಲ್ಲಾದಕ್ಕಿಂತ ಮೊದಲು ಮನುಷ್ಯರೆಲ್ಲರಿ ಗೋಸ್ಕರವೂ ಅರಸರುಗಳಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ವಿಜ್ಞಾಪನೆಗಳನ್ನೂ ಪ್ರಾರ್ಥನೆಗಳನ್ನೂ ಮನವೆಗಳನ್ನೂ ಕೃತಜ್ಞತಾಸ್ತುತಿ ಗಳನ್ನೂ ಮಾಡಬೇಕೆಂದು ಎಚ್ಚರಿಸುತ್ತೇನೆ.

2:2b.1TI.002.002 ಹೀಗೆ ನಾವು ಶಾಂತಿ ಸಮಾಧಾನಗಳಿಂದ ಕೂಡಿದ ಜೀವನ ವನ್ನು ಪೂರ್ಣ ಭಕ್ತಿಯಿಂದಲೂ ಗೌರವದಿಂದಲೂ ನಡಿಸುವದಕ್ಕಾಗುವದು.

2:3b.1TI.002.003 ಯಾಕಂದರೆ ಇದು ನಮ್ಮ ರಕ್ಷಕನಾದ ದೇವರ ದೃಷ್ಟಿಯಲ್ಲಿ ಒಳ್ಳೇದಾಗಿಯೂ ಅಂಗೀಕರಿಸತಕ್ಕದ್ದಾಗಿಯೂ ಅದೆ.

2:4b.1TI.002.004 ಎಲ್ಲಾ ಮನುಷ್ಯರು ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರ ಬೇಕೆಂಬದು ಆತನ ಚಿತ್ತವಾಗಿದೆ.

2:5b.1TI.002.005 ಯಾಕಂದರೆ ದೇವರು ಒಬ್ಬನೇ;ದೇವರಿಗೂ ಮನಷ್ಯರಿಗೂ ಮಧ್ಯಸ್ಥನು ಒಬ್ಬನೇ; ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ;

2:6b.1TI.002.006 ಆತನು ಎಲ್ಲರಿಗೋಸ್ಕರ ವಿಮೋಚನೆಯ ಕ್ರಯವಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು; ಇದೇ ತಕ್ಕಕಾಲದಲ್ಲಿ ಹೇಳ ಬೇಕಾದ ಸಾಕ್ಷಿಯಾಗಿದೆ.

2:7b.1TI.002.007 ಆ ಸಾಕ್ಷಿಯನ್ನು ಪ್ರಸಿದ್ಧಿ ಪಡಿಸುವದಕ್ಕಾಗಿಯೇ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ನಂಬಿಕೆಯಿಂದ ಮತ್ತು ಸತ್ಯದಿಂದ ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪ ಟ್ಟೆನು. (ಇದನ್ನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ.)

2:8b.1TI.002.008 ಆದದರಿಂದ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ಸಂದೇಹವೂ ಇಲ್ಲದೆ ಪವಿತ್ರವಾದ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ನಾನು ಅಪೇಕ್ಷಿಸು ತ್ತೇನೆ.

2:9b.1TI.002.009 ಹಾಗೆಯೇ ಸ್ತ್ರೀಯರು ಮಾನಸ್ಥೆಯರಾಗಿಯೂ ಸ್ವಸ್ಥಬುದ್ಧಿಯುಳ್ಳವರಾಗಿಯೂ ಇದ್ದು ಮರ್ಯಾದೆಗೆ ತಕ್ಕ ಉಡುಪನ್ನುಟ್ಟುಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ. ಅವರು ಜಡೆ ಚಿನ್ನ ಮುತ್ತುಗಳು ಬೆಲೆಯುಳ್ಳ ವಸ್ತ್ರ ಇವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ

2:10b.1TI.002.010 (ದೇವ ಭಕ್ತೆಯರೆನಿಸಕೊಳ್ಳುವ ಸ್ತ್ರೀಯರಿಗೆ ಯುಕ್ತವಾಗಿರುವ ಪ್ರಕಾರ) ಸತ್ಕ್ರಿಯೆಗಳಿಂದಲೇ ಅಲಂಕರಿಸಿಕೊಳ್ಳಬೇಕು.

2:11b.1TI.002.011 ಸ್ತ್ರೀಯು ಮೌನವಾಗಿದ್ದು ಪೂರ್ಣ ವಿಧೇಯಳಾಗಿ ಕಲಿಯಬೇಕು.

2:12b.1TI.002.012 ಆದರೆ ಉಪದೇಶ ಮಾಡುವದ ಕ್ಕಾಗಲೀ ಪುರುಷರ ಮೇಲೆ ಅಧಿಕಾರ ನಡಿಸುವದ ಕ್ಕಾಗಲೀ ಸ್ತ್ರೀಗೆ ನಾನು ಅಪ್ಪಣೆಕೊಡುವದಿಲ್ಲ; ಆಕೆಯು ಮೌನವಾಗಿರಬೇಕು.

2:13b.1TI.002.013 ಮೊದಲು ನಿರ್ಮಿತನಾದ ವನು ಆದಾಮನಲ್ಲವೇ, ಆಮೇಲೆ ಹವ್ವಳು;

2:14b.1TI.002.014 ಇದ ಲ್ಲದೆ ಆದಾಮನು ವಂಚನೆಗೆ ಒಳಬೀಳಲಿಲ್ಲ, ಸ್ತ್ರೀಯು ವಂಚನೆಗೆ ಒಳಬಿದ್ದು ಅಪರಾಧಿಯಾದಳು.ಆದರೂ ಅವರು ಸ್ವಸ್ಥ ಬುದ್ಧಿಯಿಂದೊಡಗೂಡಿದ ನಂಬಿಕೆಯ ಲ್ಲಿಯೂ ಪ್ರೀತಿಯಲ್ಲಿಯೂ ಪರಿಶುದ್ಧತೆಯಲ್ಲಿಯೂ ನೆಲೆಗೊಂಡಿದ್ದರೆ ಆಕೆಯು ಮಗುವನ್ನು ಹೆರುವದರಲ್ಲಿ ರಕ್ಷಣೆ ಹೊಂದುವಳು.

2:15b.1TI.002.015 ಆದರೂ ಅವರು ಸ್ವಸ್ಥ ಬುದ್ಧಿಯಿಂದೊಡಗೂಡಿದ ನಂಬಿಕೆಯ ಲ್ಲಿಯೂ ಪ್ರೀತಿಯಲ್ಲಿಯೂ ಪರಿಶುದ್ಧತೆಯಲ್ಲಿಯೂ ನೆಲೆಗೊಂಡಿದ್ದರೆ ಆಕೆಯು ಮಗುವನ್ನು ಹೆರುವದರಲ್ಲಿ ರಕ್ಷಣೆ ಹೊಂದುವಳು.

3

3:1b.1TI.003.001 ಸಭಾಧ್ಯಕ್ಷನ ಉದ್ಯೋಗವನ್ನು ಪಡಕೊಳ್ಳ ಬೇಕೆಂದು ಆಶಿಸುವವನು ಒಳ್ಳೇ ಕೆಲಸ ವನ್ನು ಅಪೇಕ್ಷಿಸುವವನಾಗಿದ್ದಾನೆಂಬ ಮಾತು ಸತ್ಯವಾದ ದ್ದಾಗಿದೆ.

3:2b.1TI.003.002 ಸಭಾಧ್ಯಕ್ಷನು ದೋಷಾರೋಪಣೆಯಿಲ್ಲ ದವನೂ ಏಕಪತ್ನಿಯುಳ್ಳವನು ಜಿತೇಂದ್ರಿಯನೂ ಸ್ವಸ್ಥಚಿತ್ತನೂ ಮಾನಸ್ಥನೂ ಅತಿಥಿಸತ್ಕಾರಮಾಡು ವವನೂ ಬೋಧಿಸುವದರಲ್ಲಿ ಪ್ರವೀಣನೂ ಆಗಿರತಕ್ಕದ್ದು.

3:3b.1TI.003.003 ಅವನು ಕುಡಿಯುವವನಾಗಿರಬಾರದು. ಹೊಡೆದಾಡುವವನಾಗಿರಬಾರದು, ದ್ರವ್ಯಾಶೆಯುಳ್ಳವ ನಾಗಿರಬಾರದು; ಆದರೆ ತಾಳ್ಮೆಯುಳ್ಳವನೂ ಕುತರ್ಕ ಮಾಡದವನೂ ದುರಾಶೆಯಿಲ್ಲದವನೂ ಆಗಿರಬೇಕು.

3:4b.1TI.003.004 ಪೂರ್ಣ ಗೌರವದಿಂದ ತನ್ನ ಮಕ್ಕಳನ್ನೂ ಅಧೀನದಲ್ಲಿ ಟ್ಟುಕೊಂಡು ಸ್ವಂತ ಮನೆಯವರನ್ನು ಚೆನ್ನಾಗಿ ಆಳುವವ ನಾಗಿರಬೇಕು.

3:5b.1TI.003.005 (ಸ್ವಂತ ಮನೆಯವರನ್ನು ಆಳುವದಕ್ಕೆ ತಿಳಿಯದವನು ದೇವರ ಸಭೆಯನ್ನು ಹೇಗೆ ಪರಾಮರಿ ಸುವನು)?

3:6b.1TI.003.006 ಅವನು ಹೊಸಬನಾಗಿರಬಾರದು; ಅಂಥ ವನಾದರೆ ಉಬ್ಬಿಕೊಂಡು ಸೈತಾನನ ಶಿಕ್ಷಾವಿಧಿಗೆ ಒಳಗಾಗುವನು.

3:7b.1TI.003.007 ಇದಲ್ಲದೆ ಅವನು ನಿಂದೆಗೆ ಗುರಿ ಯಾಗದಂತೆಯೂ ಸೈತಾನನ ಉರ್ಲಿಗೆ ಸಿಕ್ಕಿಬೀಳ ದಂತೆಯೂ ಹೊರಗಿನವರಿಂದ ಒಳ್ಳೇಸಾಕ್ಷಿಯನ್ನು ಹೊಂದಿದವನಾಗಿರತಕ್ಕದ್ದು.

3:8b.1TI.003.008 ಅದೇ ರೀತಿಯಾಗಿ ಸಭಾಸೇವಕರು ಗೌರವವುಳ್ಳ ವರಾಗಿರಬೇಕು; ಅವರು ಎರಡು ನಾಲಿಗೆಯುಳ್ಳವರಾಗಿ ರಬಾರದು. ಹೆಚ್ಚು ದ್ರಾಕ್ಷಾರಸ ಕುಡಿಯುವವರೂ ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ

3:9b.1TI.003.009 ನಂಬಿಕೆಯ ಮರ್ಮವನ್ನು ಶುದ್ಧ ಮನಸ್ಸಾಕ್ಷಿಯಲ್ಲಿ ಹಿಡಿದುಕೊಂಡವರಾಗಿರಬೇಕು.

3:10b.1TI.003.010 ಇದಲ್ಲದೆ ಅವರು ಸಹ ಮೊದಲು ಪರೀಕ್ಷಿಸಲ್ಪಡಬೇಕು; ತರುವಾಯ ಅವರು ದೋಷರಹಿತರಾಗಿ ಕಂಡುಬಂದರೆ ಸಭಾ ಸೇವಕರ ಉದ್ಯೋಗವನ್ನು ನಡಿಸಲಿ.

3:11b.1TI.003.011 ಹಾಗೆಯೇ ಅವರ ಹೆಂಡತಿಯರು ಗೌರವವುಳ್ಳವರಾಗಿರಬೇಕು; ಚಾಡಿ ಹೇಳದವರೂ ಸ್ವಸ್ಥಬುದ್ಧಿಯುಳ್ಳವರೂ ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರೂ ಆಗಿರತಕ್ಕದ್ದು.

3:12b.1TI.003.012 ಸಭಾ ಸೇವಕರು ಏಕಪತ್ನಿಯುಳ್ಳವರೂ ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ಆಳುವವರೂ ಆಗಿರಬೇಕು.

3:13b.1TI.003.013 ಸಭಾಸೇವಕರಾಗಿ ಚೆನ್ನಾಗಿ ಕೆಲಸಮಾಡಿದವರು ತಮಗೆ ಒಳ್ಳೇ ಪದವಿಯನ್ನೂ ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಸಂಬಂಧವಾಗಿ ಬಹು ಧೈರ್ಯವನ್ನೂ ಸಂಪಾದಿಸಿಕೊಳ್ಳುತ್ತಾರೆ.

3:14b.1TI.003.014 ಬೇಗನೆ ನಿನ್ನ ಬಳಿಗೆ ಬರುವನೆಂಬ ನಿರೀಕ್ಷೆಯಿಂದ ನಾನು ನಿನಗೆ ಈ ವಿಷಯಗಳನ್ನು ಬರೆದಿದ್ದೇನೆ.

3:15b.1TI.003.015 ಆದರೆ ಒಂದು ವೇಳೆ ನಾನು ತಡಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಬೇಕು.ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ

3:16b.1TI.003.016 ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ

4

4:1b.1TI.004.001 ಕಡೇಕಾಲಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ನಂಬಿಕೆಯಿಂದ ತೊಲಗಿಹೋಗುವ ರೆಂದು ಆತ್ಮನು ಸ್ಪಷ್ಟವಾಗಿ ಹೇಳುತ್ತಾನೆ.

4:2b.1TI.004.002 ಅವರು ಕಪಟದಲ್ಲಿ ಸುಳ್ಳಾಡುವವರೂ ತಮ್ಮ ಮನಸ್ಸಾಕ್ಷಿಯ ಮೇಲೆ ಕಾಸಿದ ಕಬ್ಬಿಣದಿಂದ ಬರೆ ಹಾಕಲ್ಪಟ್ಟವರೂ ಆಗಿದ್ದು

4:3b.1TI.004.003 ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವದಕ್ಕೋಸ್ಕರ ದೇವರು ಉಂಟು ಮಾಡಿದ ಆಹಾರವನ್ನು ತಿನ್ನಬಾರ ದೆಂತಲೂ ಆಜ್ಞಾಪಿಸುತ್ತಾರೆ.

4:4b.1TI.004.004 ದೇವರ ಪ್ರತಿಯೊಂದು ಸೃಷ್ಟಿಯೂ ಒಳ್ಳೇದಾಗಿದೆ; ಸ್ತೋತ್ರ ಮಾಡಿ ತೆಗೆದು ಕೊಳ್ಳುವ ಪಕ್ಷಕ್ಕೆ ಯಾವದನ್ನೂ ನಿರಾಕರಿಸಬಾರದು.

4:5b.1TI.004.005 ದೇವರ ವಾಕ್ಯದಿಂದಲೂ ಪ್ರಾರ್ಥನೆಯಿಂದಲೂ ಅದು ಪವಿತ್ರವಾಗುತ್ತದಲ್ಲಾ.

4:6b.1TI.004.006 ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ ನೀನು ಅನುಸರಿಸುವ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಪೋಷಣೆ ಹೊಂದುವವರಾಗಿ ಯೇಸು ಕ್ರಿಸ್ತನ ಒಳ್ಳೇ ಸೇವಕನಾಗಿರುವಿ.

4:7b.1TI.004.007 ಆದರೆ ಅಜ್ಜೀಕಥೆಗಳಂತಿರುವ ಅಶುದ್ಧವಾದ ಆ ಕಥೆಗಳನ್ನು ನಿರಾಕರಿಸಿ ನೀನು ದೇವ ಭಕ್ತಿಯ ವಿಷಯದಲ್ಲಿಯೇ ಸಾಧನೆ ಮಾಡಿಕೋ.

4:8b.1TI.004.008 ದೇಹಸಾಧನೆಯು ಸ್ವಲ್ಪ ಮಟ್ಟಿಗೆ ಲಾಭಕರವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಲಾಭಕರವಾದದ್ದು; ಆದಕ್ಕೆ ಈಗಲೂ ಮುಂದೆ ಬರುವದಕ್ಕೂ ಜೀವಾಗ್ದಾನ ಉಂಟು.

4:9b.1TI.004.009 ಈ ಮಾತು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ.

4:10b.1TI.004.010 ಆದದರಿಂದ ಇದಕ್ಕಾಗಿ ನಾವು ಕಷ್ಟಪಡುವವರೂ ನಿಂದೆಯನ್ನನುಭವಿಸುವವರೂ ಆಗಿದ್ದೇವೆ; ಯಾಕಂದರೆ ಎಲ್ಲಾ ಮನುಷ್ಯರಿಗೆ ವಿಶೇಷವಾಗಿ ನಂಬುವವರಿಗೆ ರಕ್ಷಕನಾಗಿರುವ ಜೀವವುಳ್ಳ ದೇವರನ್ನು ನಾವು ನಂಬಿ ದ್ದೇವೆ.

4:11b.1TI.004.011 ಈ ವಿಷಯಗಳನ್ನು ಆಜ್ಞಾಪಿಸಬೇಕು ಮತ್ತು ಬೋಧಿಸಬೇಕು.

4:12b.1TI.004.012 ಯೌವನಸ್ಥನೆಂದು ನಿನ್ನನ್ನು ಅಸಡ್ಡೆ ಮಾಡುವದಕ್ಕೆ ಯಾರಿಗೂ ಅವಕಾಶಕೊಡದೆ ನಂಬು ವವರಿಗೆ ನಡೆ ನುಡಿ ಪ್ರೀತಿ ಆತ್ಮ ನಂಬಿಕೆ ಶುದ್ಧತ್ವದಲ್ಲಿ ನೀನೇ ಮಾದರಿಯಾಗಿರು.

4:13b.1TI.004.013 ನಾನು ಬರುವ ತನಕ ಓದುವದರಲ್ಲಿಯೂ ಎಚ್ಚರಿಸುವದರಲ್ಲಿಯೂ ಬೋಧಿ ಸುವದರಲ್ಲಿಯೂ ಲಕ್ಷ್ಯಕೊಡು.

4:14b.1TI.004.014 ನಿನ್ನಲ್ಲಿರುವ ವರವನ್ನು ಅಲಕ್ಷ್ಯಮಾಡಬೇಡ; ಸಭೆಯ ಹಿರಿಯರು ಪ್ರವಾದನೆಯಿಂದ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ ಅದು ನಿನಗೆ ಕೊಡಲ್ಪಟ್ಟಿತಲ್ಲಾ.

4:15b.1TI.004.015 ಈ ವಿಷಯಗಳನ್ನು ಧ್ಯಾನಿಸು ವವನಾಗಿರು; ನಿನ್ನನ್ನು ಸಂಪೂರ್ಣವಾಗಿ ಅವುಗಳಿಗೆ ಒಪ್ಪಿಸಿಕೊಡು; ಹೀಗೆ ನಿನಗಾದ ಲಾಭವು ಎಲ್ಲರಿಗೂ ತೋರಿಬಂದೀತು.ನಿನ್ನ ವಿಷಯದಲ್ಲಿಯೂ ಉಪ ದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಇವುಗಳಲ್ಲಿ ನಿರತನಾಗಿರು; ಹೀಗೆ ಮಾಡುವದರಿಂದ ನೀನು ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.

4:16b.1TI.004.016 ನಿನ್ನ ವಿಷಯದಲ್ಲಿಯೂ ಉಪ ದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಇವುಗಳಲ್ಲಿ ನಿರತನಾಗಿರು; ಹೀಗೆ ಮಾಡುವದರಿಂದ ನೀನು ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.

5

5:1b.1TI.005.001 ವೃದ್ಧನನ್ನು ಗದರಿಸದೆ ತಂದೆಯೆಂದು ಭಾವಿಸಿ ಬುದ್ಧಿಹೇಳು. ಯೌವನಸ್ಥರನ್ನು ಸಹೋದರರೆಂದೂ

5:2b.1TI.005.002 ವೃದ್ಧಸ್ತ್ರೀಯರನ್ನು ತಾಯಂದಿ ರೆಂದೂ ಯೌವನ ಸ್ತ್ರೀಯರನ್ನು ಪೂರ್ಣ ಪವಿತ್ರತೆ ಯಿಂದ ಸಹೋದರಿಯರೆಂದೂ ಎಣಿಸಿ ಅವರವರಿಗೆ ಬುದ್ಧಿಹೇಳು.

5:3b.1TI.005.003 ನಿಜವಾಗಿಯೂ ವಿಧವೆಯಾಗಿರುವವರನ್ನು ಗೌರ ವಿಸು; ಅವರು ವಿಧವೆಯರಾಗಿದ್ದಾರಲ್ಲಾ.

5:4b.1TI.005.004 ಆದರೆ ಯಾವ ವಿಧವೆಗಾದರೂ ಮಕ್ಕಳಾಗಲಿ, ಮೊಮ್ಮಕ್ಕಳಾ ಗಲಿ, ಇದ್ದರೆ ಅವರೇ ಮೊದಲು ತಮ್ಮ ಮನೆಯಲ್ಲಿ ಭಕ್ತಿ ತೋರಿಸುವದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪ ಕಾರ ಮಾಡುವದಕ್ಕೂ ಕಲಿತುಕೊಳ್ಳಲಿ; ಇದು ದೇವರ ದೃಷ್ಟಿಯಲ್ಲಿ ಯೋಗ್ಯವಾದದ್ದೂ ಮೆಚ್ಚಿಕೆಯಾದದ್ದೂ ಆಗಿದೆ.

5:5b.1TI.005.005 ನಿಜವಾಗಿಯೂ ದಿಕ್ಕಿಲ್ಲದ ವಿಧವೆಯು ದೇವರ ಮೇಲೆ ನಿರೀಕ್ಷೆಯನ್ನಿಟ್ಟು ಹಗಲಿರುಳು ವಿಜ್ಞಾಪನೆಗಳ ಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನೆಲೆಗೊಂಡಿರುವಳು.

5:6b.1TI.005.006 ಆದರೆ ಭೋಗಿಯಾಗಿರುವ ವಿಧವೆಯು ಬದುಕಿರು ವಾಗಲೂ ಸತ್ತವಳೇ.

5:7b.1TI.005.007 ಅವರು ನಿಂದೆಗೆ ಗುರಿಯಾಗ ದಂತೆ ಇವುಗಳನ್ನು ಆಜ್ಞಾಪಿಸು.

5:8b.1TI.005.008 ಯಾವನಾದರೂ ಸ್ವಂತದವರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ನಂಬಿಕೆಯನ್ನು ಅಲ್ಲಗಳೆ ದವನು ನಂಬದವನಿಗಿಂತ ಕೆಟ್ಟವನೂ ಆಗಿದ್ದಾನೆ.

5:9b.1TI.005.009 ವಯಸ್ಸಿನಲ್ಲಿ ಅರುವತ್ತಕ್ಕೆ ಕಡಿಮೆಯಿದ್ದ ವಿಧವೆಯರನ್ನು ವಿಧವೆಯರ ಪಟ್ಟಿಯಲ್ಲಿ ಸೇರಿಸಬೇಡ. ಅಂಥವಳಾ ದರೂ ಒಬ್ಬ ಗಂಡನಿಗೆ ಮಾತ್ರ ಹೆಂಡತಿಯಾಗಿದ್ದವಳೂ

5:10b.1TI.005.010 ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡ ವಳೂ ಆಗಿರಬೇಕು; ಆಕೆಯು ಮಕ್ಕಳನ್ನು ಸಾಕಿದವಳಾ ಗಲಿ ಅತಿಥಿಸತ್ಕಾರವನ್ನು ಮಾಡಿದವಳಾಗಲಿ ಪರಿಶುದ್ಧರ ಪಾದಗಳನ್ನು ತೊಳೆದವಳಾಗಲಿ ಸಂಕಟದಲ್ಲಿ ಬಿದ್ದವರಿಗೆ ಸಹಾಯ ಮಾಡಿದವಳಾಗಲಿ ಎಲ್ಲಾ ಸತ್ಕಾರ್ಯಗಳಲಿ ಆಸಕ್ತಿಯುಳ್ಳವಳಾಗಲಿ ಆಗಿರ

5:11b.1TI.005.011 ಆದರೆ ಯೌವನಸ್ಥ ವಿಧವೆಯರನ್ನು ಲೆಕ್ಕಕ್ಕೆ ಸೇರಿಸಬೇಡ; ಯಾಕಂದರೆ ಅವರು ಕ್ರಿಸ್ತನಿಗೆ ಒಳಗಾಗಲೊಲ್ಲದೆ ಮದಿಸಿ ಮದುವೆ ಮಾಡಿಕೊಳ್ಳಬೇಕೆಂದು ಇಷ್ಟಪ ಟ್ಟಾರು.

5:12b.1TI.005.012 ಅಂಥವರು ತಮ್ಮ ಮೊದಲಿನ ನಂಬಿಕೆಯನ್ನು ತೊರೆದು ದಂಡನೆಗೆ ಗುರಿಯಾಗಿದ್ದಾರೆ.

5:13b.1TI.005.013 ಇದಲ್ಲದೆ ಅವರು ಮನೆಯಿಂದ ಮನೆಗೆ ತಿರುಗಾಡುತ್ತಾ ಮೈಗಳ್ಳತನವನ್ನು ಕಲಿಯುತ್ತಾರೆ; ಮೈಗಳ್ಳರಾಗುವದ ಲ್ಲದೆ ಹರಟೆ ಮಾತನ್ನಾಡುವರು ಮತ್ತು ಇತರರ ಕೆಲಸ ದಲ್ಲಿ ಕೈಹಾಕುವವರಾಗಿ ಆಡಬಾರದ ಮಾತುಗಳನ್ನಾಡು ತ್ತಾರೆ.

5:14b.1TI.005.014 ಆದದರಿಂದ ಯೌವನಸ್ಥ ವಿಧವೆಯರು ಮದುವೆ ಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯ ಕೆಲಸ ನಡಿಸುವದೇ ನನ್ನ ಅಪೇಕ್ಷೆ; ಹಾಗೆ ಮಾಡುವದ ರಿಂದ ವಿರೋಧಿಯ ನಿಂದೆಗೆ ಆಸ್ಪದಕೊಡದೆ ಇರುವರು.

5:15b.1TI.005.015 ಇಷ್ಟರೊಳಗೆ ಕೆಲವರು ದಾರಿಬಿಟ್ಟು ಸೈತಾನನನ್ನು ಹಿಂಬಾಲಿಸಿದ್ದಾರೆ.

5:16b.1TI.005.016 ನಂಬುವವರಾದ ಪುರುಷನ ಇಲ್ಲವೆ ಸ್ತ್ರೀಯ ಅಧೀನತೆಯಲ್ಲಿ ವಿಧವೆಯರಿದ್ದರೆ ಅವರೇ ಅವರನ್ನು ಸಂರಕ್ಷಿಸಲಿ. ಸಭೆಯು ದಿಕ್ಕಿಲ್ಲದ ವಿಧವೆಯರಿಗೆ ಸಹಾಯಮಾಡಬೇಕಾಗಿರುವದರಿಂದ ವಿಧವೆಯರು ಆ ಭಾರವನ್ನು ಸಭೆಯ ಮೇಲೆ ಹಾಕಬಾರದು.

5:17b.1TI.005.017 ಚೆನ್ನಾಗಿ ಅಧಿಕಾರ ನಡಿಸುವ ಹಿರಿಯರನ್ನು, ಅವ ರೊಳಗೆ ವಿಶೇಷವಾಗಿ ವಾಕ್ಯದಲ್ಲಿಯೂ ಬೋಧನೆ ಯಲ್ಲಿಯೂ ಕಷ್ಟಪಡುವವರನ್ನು ಇಮ್ಮಡಿಯಾದ ಮಾನಕ್ಕೆ ಯೋಗ್ಯರೆಂದು ಎಣಿಸಬೇಕು.

5:18b.1TI.005.018 ಕಣತುಳಿ ಯುವ ಎತ್ತಿನ ಬಾಯಿ ಕಟ್ಟಬಾರದೆಂತಲೂ--ಕೆಲಸ ದವನು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆಂತಲೂ ಬರಹದಲ್ಲಿ ಹೇಳಿದೆಯಲ್ಲಾ.

5:19b.1TI.005.019 (ಸಭೆಯ) ಹಿರಿಯನ ಮೇಲೆ ಯಾರಾದರೂ ದೂರು ಹೇಳಿದರೆ ಇಬ್ಬರು ಮೂವರು ಸಾಕ್ಷಿಗಳಿದ್ದ ಹೊರತಾಗಿ ಅದನ್ನು ತೆಗೆದು ಕೊಳ್ಳಬೇಡ.

5:20b.1TI.005.020 ಪಾಪಮಾಡುವವರನ್ನು ಎಲ್ಲರ ಮುಂದೆಯೇ ಗದರಿಸು; ಇದರಿಂದ ಮಿಕ್ಕಾದವರಿಗೂ ಭಯವುಂಟಾಗುವದು.

5:21b.1TI.005.021 ನೀನು ವಿಚಾರಿಸುವದಕ್ಕೆ ಮೊದಲೇ ತಪ್ಪು ಹೊರಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ಇವುಗಳನ್ನು ಕೈಕೊಳ್ಳಬೇಕೆಂದು ದೇವರ ಮುಂದೆಯೂ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ಆಯಲ್ಪಟ್ಟಿರುವ ದೂತರ ಮುಂದೆಯೂ ಖಂಡಿತವಾಗಿ ನಾನು ಹೇಳುತ್ತೇನೆ.

5:22b.1TI.005.022 ಅವಸರದಿಂದ ಯಾರ ಮೇಲೆಯೂ ಹಸ್ತಾರ್ಪಣೆ ಮಾಡಬೇಡ; ಮತ್ತು ಇತರರ ಪಾಪಗಳಲ್ಲಿ ಪಾಲುಗಾರನಾಗದೆ ನೀನು ುದ್ಧನಾಗಿರುವ ಹಾಗೆ ನೋಡಿಕೋ

5:23b.1TI.005.023 ಇನ್ನು ಮೇಲೆ ನೀರನ್ನು ಮಾತ್ರ ಕುಡಿಯುವವನಾಗಿರದೆ ನಿನ್ನ ಹೊಟ್ಟೆಯ ನಿಮಿತ್ತವಾಗಿಯೂ ನಿನಗೆ ಆಗಾಗ್ಗೆ ಉಂಟಾ ಗುವ ಬಲಹೀನತೆಗಳಿಗಾಗಿಯೂ ದ್ರಾಕ್ಷಾರಸವನ್ನು ಸ್ವಲ್ಪವಾಗಿ ತೆಗೆದುಕೋ.

5:24b.1TI.005.024 ಕೆಲವರ ಪಾಪಗಳು ತೀರ್ಪಿಗೆ ಮೊದಲೇ ಬಹಿರಂಗವಾಗುತ್ತವೆ; ಕೆಲವರ ಪಾಪಗಳು ತರುವಾಯ ಹಿಂಬಾಲಿಸುತ್ತವೆ.ಅದರಂತೆಯೇ ಕೆಲವರ ಒಳ್ಳೇ ಕ್ರಿಯೆಗಳು ಮೊದಲೇ ಪ್ರತ್ಯಕ್ಷವಾಗಿರುತ್ತವೆ. ಪ್ರತ್ಯಕ್ಷವಾಗದಿರುವವುಗಳು ಮರೆ ಯಾಗಿರಲಾರವು.

5:25b.1TI.005.025 ಅದರಂತೆಯೇ ಕೆಲವರ ಒಳ್ಳೇ ಕ್ರಿಯೆಗಳು ಮೊದಲೇ ಪ್ರತ್ಯಕ್ಷವಾಗಿರುತ್ತವೆ. ಪ್ರತ್ಯಕ್ಷವಾಗದಿರುವವುಗಳು ಮರೆ ಯಾಗಿರಲಾರವು.

6

6:1b.1TI.006.001 ದೇವರ ನಾಮಕ್ಕೂ ಆತನ ಬೋಧನೆಗೂ ದೂಷಣೆ ಉಂಟಾಗದಂತೆ ನೊಗದ ಅಧೀನದಲ್ಲಿರುವ ಸೇವಕರೆಲ್ಲರೂ ತಮ್ಮ ಸ್ವಂತ ಯಜಮಾನರನ್ನೂ ಎಲ್ಲಾ ಮಾನಕ್ಕೂ ಯೋಗ್ಯರೆಂದೆ ಣಿಸಲಿ.

6:2b.1TI.006.002 ವಿಶ್ವಾಸಿಗಳಾದ ಯಜಮಾನರಿರುವವರು, ಆ ಯಜಮಾನರನ್ನು ಸಹೋದರರೆಂದು ತಾತ್ಸಾರ ಮಾಡದೆ ಆದಾಯದಲ್ಲಿ ಪಾಲು ಹೊಂದುವವರೂ ನಂಬುವವರೂ ಪ್ರಿಯರೂ ಆಗಿದ್ದಾರೆಂದು ತಿಳಿದು ಅವರಿಗೆ ಹೆಚ್ಚಾದ ಸೇವೆ ಮಾಡಬೇಕು. ಇವುಗಳನ್ನು ಬೋಧಿಸಿ ಎಚ್ಚರಿಸು.

6:3b.1TI.006.003 ಯಾವನಾದರೂ ಬೇರೆ ವಿಧವಾದ ಉಪದೇಶ ವನ್ನು ಮಾಡಿ ಅಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ ಭಕ್ತ್ಯನುಸಾರವಾದ ಬೋಧನೆಗೂ ಸಮ್ಮತಿಸದೆ ಹೋದರೆ

6:4b.1TI.006.004 ಅಂಥವನು ಒಂದನ್ನೂ ತಿಳಿಯದೆ ಕುತರ್ಕ ವಾಗ್ವಾದಗಳನ್ನು ಮಾಡುವ ಭ್ರಾಂತಿಯಲ್ಲಿದ್ದು ಅಹಂಕಾರಿಯಾಗಿದ್ದಾನೆ. ಇವುಗಳಿಂದ ಹೊಟ್ಟೇಕಿಚ್ಚು ಜಗಳ ದೂಷಣೆ ದುಸ್ಸಂಶಯ ಇವುಗಳು ಉಂಟಾಗುತ್ತವೆ.

6:5b.1TI.006.005 ಇದ್ದಲ್ಲದೆ ಬುದ್ದಿಗೆಟ್ಟು ಸತ್ಯವಿಹೀನರಾಗಿದ್ದು ದೇವಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ವ್ಯರ್ಥ ವಾದ ವಿವಾದಗಳು ಉಂಟಾಗುತ್ತವೆ. ಇಂಥವರಿಂದ ದೂರವಾಗಿರ್ರಿ.

6:6b.1TI.006.006 ಸಂತುಷ್ಟಿಸಹಿತವಾದ ಭಕ್ತಿಯು ದೊಡ್ಡ ಲಾಭವೇ ಸರಿ.

6:7b.1TI.006.007 ನಾವು ಲೋಕದೊಳಗೆ ಏನೂ ತಕ್ಕೊಂಡು ಬರಲಿಲ್ಲವಷ್ಟೆ; ನಿಶ್ಚಯವಾಗಿ ಅದರೊಳಗಿಂದ ಏನೂ ತಕ್ಕೊಂಡು ಹೋಗಲಾರೆವು.

6:8b.1TI.006.008 ಆದದರಿಂದ ಅನ್ನವಸ್ತ್ರಗಳುಳ್ಳವರಾಗಿ ಅವುಗಳಿಂದ ತೃಪ್ತರಾಗಿರೋಣ.

6:9b.1TI.006.009 ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ.

6:10b.1TI.006.010 ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ನಂಬಿಕೆಯಿಂದ ತಪ್ಪಿಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಾವೇ ತಿವಿಸಿ ಕೊಳ್ಳುತ್ತಾರೆ.

6:11b.1TI.006.011 ಓ ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ದೂರ ಓಡಿಹೋಗು; ನೀತಿ ಭಕ್ತಿ ನಂಬಿಕೆ ಪ್ರೀತಿ ತಾಳ್ಮೆ ಸಾತ್ವಿಕತ್ವ ಇವುಗಳನ್ನು ಅನುಸರಿಸು.

6:12b.1TI.006.012 ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿಯೇ ನೀನು ಕರೆಯಲ್ಪಟ್ಟಿದ್ದೀ. ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೇ ಅರಿಕೆಯನ್ನು ಮಾಡಿದ್ದೀಯಲ್ಲಾ.

6:13b.1TI.006.013 ಎಲ್ಲರನ್ನು ಬದುಕಿಸುವ ದೇವರ ಮುಂದೆಯೂ ಪೊಂತ್ಯ ಪಿಲಾತನ ಮುಂದೆ ಶ್ರೇಷ್ಠ ಅರಿಕೆಯನ್ನು ಸಾಕ್ಷೀಕರಿಸಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ--

6:14b.1TI.006.014 ನಮ್ಮ ಕರ್ತನಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವ ತನಕ ಈ ಆಜ್ಞೆಯನ್ನು ನಿಷ್ಕಳಂಕವಾಗಿಯೂ ನಿಂದಾರಹಿತವಾಗಿಯೂ ನೀನು ಕಾಪಾಡಬೇಕು.

6:15b.1TI.006.015 ಸ್ತುತಿ ಹೊಂದತಕ್ಕ ಒಬ್ಬನೇ ಸರ್ವ ಶಕ್ತನು. ತನ್ನ ಸಮಯಗಳಲ್ಲೇ ಆತನನ್ನು ಪ್ರತ್ಯಕ್ಷ ಪಡಿಸುವನು; ಆ ಸರ್ವಶಕ್ತನು ರಾಜಾಧಿರಾಜನೂ ಕರ್ತರ ಕರ್ತನೂ ಆಗಿದ್ದಾನೆ;

6:16b.1TI.006.016 ಆತನೊಬ್ಬನೇ ಅಮರತ್ವವುಳ್ಳವನೂ ಯಾರೂ ಸವಿಾಪಿಸಲಾರದಂತ ಬೆಳಕಿನಲ್ಲಿ ವಾಸಿಸುವಾತನೂ ಆಗಿದ್ದಾನೆ; ಯಾವ ಮನುಷ್ಯನೂ ಆತನನ್ನು ಕಾಣಲಿಲ್ಲ; ಯಾರೂ ಕಾಣ ಲಾರರು; ಆತನಿಗೆ ಮಾನವೂ ನಿತ್ಯಾಧಿಕಾರವೂ ಇರಲಿ. ಆಮೆನ್‌.

6:17b.1TI.006.017 ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ

6:18b.1TI.006.018 ಅವರು ಒಳ್ಳೇದನ್ನು ಮಾಡುವವರೂ ಸತ್ಕಾರ್ಯಗಳಲ್ಲಿ ಐಶ್ವರ್ಯವಂತರೂ ಪಾಲುಕೊಡುವದರಲ್ಲಿ ಸಿದ್ಧವಾಗಿ ರುವವರೂ ಪರೋಪಕಾರ ಮಾಡುವವರೂ ಆಗಿದ್ದು.

6:19b.1TI.006.019 ಮುಂದಿನ ಕಾಲಕ್ಕೆ ಒಳ್ಳೇ ಅಸ್ತಿವಾರವಾಗುವಂಥ ವುಗಳನ್ನು ತಮಗೆ ಕೂಡಿಸಿಟ್ಟುಕೊಳ್ಳಬೇಕೆಂತಲೂ ನಿತ್ಯಜೀವವನ್ನು ಹಿಡಿದುಕೊಳ್ಳುವವರಾಗಿರ ಬೇಕೆಂತಲೂ ಅವರಿಗೆ ಆಜ್ಞಾಪಿಸು.

6:20b.1TI.006.020 ಓ ತಿಮೊಥೆಯನೇ, ಅಪಭ್ರಷ್ಟವಾದ ವ್ಯರ್ಥ ಮಾತುಗಳಿಗೂ ಸುಳ್ಳು ಹೆಸರುಳ್ಳ ಜ್ಞಾನದ ತರ್ಕ ಗಳಿಗೂ ತಪ್ಪಿಸಿಕೊಂಡು ನಿನ್ನ ವಶಕ್ಕೆ ಕೊಟ್ಟಿರುವದನು ಕಾಪಾಡು.ಕೆಲವರು ಆ ಸುಳ್ಳಾದ ಜ್ಞಾನವನ್ನು ಹೇಳಿಕೊಂಡು ನಂಬಿಕೆಯಿಂದ ತಪ್ಪಿಹೋದರು. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್‌.

6:21b.1TI.006.021 ಕೆಲವರು ಆ ಸುಳ್ಳಾದ ಜ್ಞಾನವನ್ನು ಹೇಳಿಕೊಂಡು ನಂಬಿಕೆಯಿಂದ ತಪ್ಪಿಹೋದರು. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್‌.


Holder of rights
Multilingual Bible Corpus

Citation Suggestion for this Object
TextGrid Repository (2025). Kannada Collection. 1 Timothy (Kannada). 1 Timothy (Kannada). Multilingual Parallel Bible Corpus. Multilingual Bible Corpus. https://hdl.handle.net/21.11113/0000-0016-A210-E