James (Kannada)

James (Kannada)

1

1:1b.JAM.001.001 ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬ ನು ಅನ್ಯದೇಶಗಳಲ್ಲಿ ಚದರಿರುವ (ಇಸ್ರಾಯೇಲ್‌) ಹನ್ನೆರಡು ಗೋತ್ರದವರಿಗೆ ವಂದನೆ.

1:2b.JAM.001.002 ನನ್ನ ಸಹೋದರರೇ, ನೀವು ನಾನಾವಿಧವಾದ ಸಂಕಟಗಳಲ್ಲಿ ಬಿದ್ದಿರುವಾಗ ಅದನ್ನು ಕೇವಲ ಆನಂದ ಕರವಾದದ್ದೆಂದು ಎಣಿಸಿರಿ.

1:3b.JAM.001.003 ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ತಾಳ್ಮೆಯನ್ನುಂಟು ಮಾಡುತ್ತದೆಂದು ನೀವು ತಿಳಿಯಿರಿ.

1:4b.JAM.001.004 ಆ ತಾಳ್ಮೆಯು ಸಿದ್ದಿಗೆ ಬಂದಾಗ ನೀವು ಸಂಪೂರ್ಣರೂ ಸಿದ್ಧವಾದವರೂ ಯಾವದರ ಲ್ಲಿಯೂ ಕಡಿಮೆಯಿಲ್ಲದವರೂ ಆಗಿರುವಿರಿ.

1:5b.JAM.001.005 ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆ ಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲ ರಿಗೂ ಉದಾರ ಮನಸ್ಸಿನಿಂದ ಕೊಡುವಾತನಾಗಿದ್ದಾನೆ.

1:6b.JAM.001.006 ಆದರೆ ಅವನು ಸ್ವಲ್ಪವೂ ಸಂದೇಹ ಪಡದೆ ನಂಬಿಕೆ ಯಲ್ಲಿ ಕೇಳಿಕೊಳ್ಳಲಿ. ಯಾಕಂದರೆ ಸಂದೇಹಪಡುವ ವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ತೆರೆ ಯಂತೆ ಅಲೆದಾಡುತ್ತಿರುವನು.

1:7b.JAM.001.007 ಆ ಮನುಷ್ಯನು ತಾನು ಕರ್ತನಿಂದ ಏನಾದರೂ ಹೊಂದುವೆನೆಂದು ಭಾವಿಸದೆ ಇರಲಿ.

1:8b.JAM.001.008 ಎರಡು ಮನಸ್ಸುಳ್ಳವನು ತನ್ನ ಮಾರ್ಗಗಳ ಲ್ಲೆಲ್ಲಾ ಚಂಚಲನಾಗಿದ್ದಾನೆ.

1:9b.JAM.001.009 ಹೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತ ಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ;

1:10b.JAM.001.010 ಐಶ್ವರ್ಯ ವಂತನಾದ ಸಹೋದರನು ತಾನು ದೀನಸ್ಥಿತಿಗೆ ಬಂದೆ ನೆಂದು ಉಲ್ಲಾಸಪಡಲಿ. ಆದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿ ಹೋಗುವನು.

1:11b.JAM.001.011 ಸೂರ್ಯನು ಉದಯಿಸಿದ ತಕ್ಷಣವೇ ಉಷ್ಣತೆ ಯಿಂದ ಹುಲ್ಲನ್ನು ಬಾಡಿಸಲು ಆ ಹುಲ್ಲಿನ ಹೂವು ಉದುರಿ ಅದರ ರೂಪದ ಸೊಗಸು ನಾಶವಾಗು ವದಷ್ಟೇ. ಹೀಗೆಯೇ ಐಶ್ವರ್ಯವಂತನು ತನ್ನ ದಾರಿ ಗಳಲ್ಲಿ ಬಾಡಿ ಹೋಗುವನು.

1:12b.JAM.001.012 ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು; ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನ ಮಾಡಿದ ಜೀವದ ಕಿರೀಟ ವನ್ನು ಹೊಂದುವನು;

1:13b.JAM.001.013 ಯಾವನಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ--ಈ ಪ್ರೇರಣೆಯು ನನಗೆ ದೇವರಿಂದ ಉಂಟಾಯಿತೆಂದು ಹೇಳಬಾರದು. ಯಾಕಂದರೆ ದೇವರು ಕೆಟ್ಟದ್ದರಿಂದ ಶೋಧಿಸಲಾರನು; ಆತನು ಯಾರನ್ನೂ ಶೋಧಿಸುವದೂ ಇಲ್ಲ.

1:14b.JAM.001.014 ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಯಿಂದ ಎಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ.

1:15b.JAM.001.015 ಆಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ; ಪಾಪವು ಸಂಪೂರ್ಣವಾದ ಮೇಲೆ ಮರಣ ವನ್ನು ಹಡೆಯುತ್ತದೆ.

1:16b.JAM.001.016 ನನ್ನ ಪ್ರಿಯ ಸಹೋದರರೇ, ತಪ್ಪು ಮಾಡಬೇಡಿರಿ.

1:17b.JAM.001.017 ಪ್ರತಿಯೊಂದು ಒಳ್ಳೇ ದಾನವೂ ಸಂಪೂರ್ಣವಾದ ಪ್ರತಿವರವೂ ಮೇಲಣ ವುಗಳೇ; ಅವು ಬೆಳಕುಗಳ ತಂದೆಯಿಂದ ಇಳಿದು ಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ನೆರಳೂ ಇಲ್ಲ.

1:18b.JAM.001.018 ಆತನು ತನ್ನ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಿರಲಾಗಿ ನಾವು ಆತನ ಸೃಷ್ಟಿಗಳಲ್ಲಿ ಒಂದು ತರಹದ ಪ್ರಥಮ ಫಲ ಗಳಂತಾದೆವು.

1:19b.JAM.001.019 ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ.

1:20b.JAM.001.020 ಮನುಷ್ಯನ ಕೋಪವು ದೇವರ ನೀತಿಯನ್ನು ನಡಿಸುವದಿಲ್ಲ.

1:21b.JAM.001.021 ಆದಕಾರಣ ಎಲ್ಲಾ ಮಲಿನತೆಯನ್ನೂ ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಒಳಗೆ ಬೇರೂರಿರುವ ವಾಕ್ಯಕ್ಕೆ ನಮ್ರತೆ ಯಿಂದ ಎಡೆಕೊಡಿರಿ; ಅದು ನಿಮ್ಮ ಆತ್ಮಗಳನ್ನು ರಕ್ಷಿಸು ವದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ.

1:22b.JAM.001.022 ನೀವು ವಾಕ್ಯದ ಪ್ರಕಾರ ನಡೆಯುವವರಾಗಿರ್ರಿ; ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸ ಬೇಡಿರಿ.

1:23b.JAM.001.023 ಯಾವನಾದರೂ ವಾಕ್ಯವನ್ನು ಕೇಳುವವ ನಾಗಿದ್ದು ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಹುಟ್ಟು ಮುಖವನ್ನು ನೋಡಿದ ಮನುಷ್ಯನಂತಿರುವನು.

1:24b.JAM.001.024 ಇವನು ತನ್ನನ್ನು ನೋಡಿ ಕೊಂಡು ಹೋಗಿ ತಾನು ಹೀಗಿದ್ದೇನೆಂಬದನ್ನು ಆ ಕ್ಷಣವೇ ಮರೆತುಬಿಡುವನು.

1:25b.JAM.001.025 ಆದರೆ ಬಿಡುಗಡೆ ಯನ್ನುಂಟುಮಾಡುವ ಪರಿಪೂರ್ಣವಾದ ನಿಯಮ ವನ್ನು ಲಕ್ಷ್ಯಕೊಟ್ಟು ನೋಡಿ ಇನ್ನೂ ನೋಡುತ್ತಲೇ ಇರುವವನು (ವಾಕ್ಯವನ್ನು) ಕೇಳಿ ಮರೆತುಹೋಗುವವ ನಾಗಿರದೆ ಅದರ ಪ್ರಕಾರ ನಡೆಯುವವನಾಗಿದ್ದು ತನ್ನ ಕ್ರಿಯೆಯಿಂದ ಧನ್ಯನಾಗುವನು.

1:26b.JAM.001.026 ನಿಮ್ಮಲ್ಲಿ ಭಕ್ತನೆಂದೆ ಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸ ಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜನ ವಾಗಿದೆ.ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆ ಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.

1:27b.JAM.001.027 ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆ ಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.

2

2:1b.JAM.002.001 ನನ್ನ ಸಹೋದರರೇ, ಮಹಿಮೆಯುಳ್ಳ ನಮ್ಮ ಕರ್ತನಾದ ಯೇಸು ಕ್ರಿಸ್ತನ ನಂಬಿ ಕೆಯ ವಿಷಯದಲ್ಲಿ ನೀವು ಪಕ್ಷಪಾತಿಗಳಾಗಿರಬಾರದು.

2:2b.JAM.002.002 ಹೇಗಂದರೆ ಒಬ್ಬ ಮನುಷ್ಯನು ಚಿನ್ನದ ಉಂಗುರವನ್ನೂ ಅಂದವಾದ ವಸ್ತ್ರವನ್ನೂ ಹಾಕಿಕೊಂಡು ನಿಮ್ಮ ಸಭೆ ಯೊಳಗೆ ಬರಲು ಮತ್ತು ಒಬ್ಬ ಬಡ ಮನುಷ್ಯನು ಸಹ ಹೀನವಾದ ಬಟ್ಟೆ ಹಾಕಿಕೊಂಡು ಬರಲು

2:3b.JAM.002.003 ನೀವು ಹೊಳೆಯುವ ವಸ್ತ್ರಗಳನ್ನು ಧರಿಸಿಕೊಂಡಿರುವವನನ್ನು ಗೌರವಿಸಿ ಅವನಿಗೆ--ನೀನು ಇಲ್ಲಿ ಈ ಒಳ್ಳೇ ಸ್ಥಳದಲ್ಲಿ ಕೂತುಕೋ ಎಂತಲೂ ಆ ಬಡವನಿಗೆ--ನೀನು ಅಲ್ಲಿ ನಿಂತುಕೋ ಇಲ್ಲವೆ ಇಲ್ಲಿ ನನ್ನ ಕಾಲ್ಮಣೆಯ ಹತ್ತಿರ ಕೂತುಕೋ ಎಂತಲೂ ಹೇಳಿದರೆ

2:4b.JAM.002.004 ನೀವು ನಿಮ್ಮಲ್ಲಿ ಪಕ್ಷಪಾತಿಗಳಾಗಿ ಕೆಟ್ಟ ಆಲೋಚನೆಗಳ ನ್ಯಾಯಾಧಿಪತಿ ಗಳಾಗಿದ್ದೀರಲ್ಲವೇ?

2:5b.JAM.002.005 ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?

2:6b.JAM.002.006 ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಗಳ ಮುಂದೆ ಎಳೆದು ಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?

2:7b.JAM.002.007 ನೀವು ಕರೆಯಲ್ಪಟ್ಟ ಆ ಯೋಗ್ಯವಾದ ನಾಮವನ್ನು ದೂಷಿಸುವವರು ಅವರಲ್ಲವೋ?

2:8b.JAM.002.008 ಆದರೂ ಬರಹದ ಪ್ರಕಾರ--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸ ಬೇಕೆಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ ನೀವು ಒಳ್ಳೇದನ್ನು ಮಾಡುವವರಾಗಿರುವಿರಿ.

2:9b.JAM.002.009 ನೀವು ಪಕ್ಷಪಾತಿಗಳಾಗಿದ್ದರೆ ಪಾಪ ಮಾಡುವವರಾಗಿದ್ದು ಅಪ ರಾಧಿಗಳೆಂದು ನ್ಯಾಯಪ್ರಮಾಣದಿಂದ ಮನದಟ್ಟು ಮಾಡಲ್ಪಡುತ್ತೀರಿ.

2:10b.JAM.002.010 ಯಾಕಂದರೆ ಯಾವನಾದರೂ ನ್ಯಾಯಪ್ರಮಾಣವನ್ನೆಲ್ಲಾ ಕೈಕೊಂಡು ನಡೆದು ಒಂದೇ ಒಂದರಲ್ಲಿ ತಪ್ಪಿದರೆ ಅವನು ಎಲ್ಲಾ ವಿಷಯದಲ್ಲಿಯೂ ಅಪರಾಧಿಯಾಗುತ್ತಾನೆ.

2:11b.JAM.002.011 ವ್ಯಭಿಚಾರ ಮಾಡಬಾರ ದೆಂದು ಹೇಳಿದಾತನೇ--ನರಹತ್ಯ ಮಾಡಬಾರ ದೆಂತಲೂ ಹೇಳಿದನು. ಆದಕಾರಣ ನೀನು ವ್ಯಭಿಚಾರ ಮಾಡದೆ ಇದ್ದರೂ ನರಹತ್ಯ ಮಾಡಿದರೆ ನ್ಯಾಯ ಪ್ರಮಾಣವನ್ನು ವಿಾರಿದವನಾದಿ.

2:12b.JAM.002.012 ಬಿಡುಗಡೆಯ ನ್ನುಂಟು ಮಾಡುವ ನ್ಯಾಯಪ್ರಮಾಣದಿಂದ ಅವರು ತೀರ್ಪು ಹೊಂದುವವರಿಗೆ ತಕ್ಕಂತೆಯೇ ನೀವು ಮಾತನಾಡಿರಿ. ಹಾಗೆಯೇ ಮಾಡಿರಿ.

2:13b.JAM.002.013 ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.

2:14b.JAM.002.014 ನನ್ನ ಸಹೋದರರೇ, ಒಬ್ಬನು ತನಗೆ ನಂಬಿಕೆ ಯುಂಟೆಂದು ಹೇಳಿಕೊಂಡು ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವದೋ?

2:15b.JAM.002.015 ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಬಟ್ಟೆಯೂ ಆ ದಿನದ ಆಹಾರವೂ ಇಲ್ಲದಿರುವಾಗ

2:16b.JAM.002.016 ನಿಮ್ಮಲ್ಲಿ ಒಬ್ಬನು ಅವರಿಗೆ ದೇಹಕ್ಕೆ ಬೇಕಾದವುಗಳನ್ನು ಕೊಡದೆ--ಸಮಾಧಾನದಿಂದ ಹೋಗಿರಿ, ಬೆಂಕಿಕಾಯಿಸಿಕೊಳ್ಳಿರಿ, ಹೊಟ್ಟೆತುಂಬಿಸಿ ಕೊಳ್ಳಿರಿ ಎಂದು ಹೇಳಿದರೆ ಪ್ರಯೋಜನವೇನು?

2:17b.JAM.002.017 ಹಾಗೆಯೇ ಕ್ರಿಯೆಗಳಿಲ್ಲದಿದ್ದರೆ ನಂಬಿಕೆಯು ಒಂಟಿಯಾಗಿದ್ದು ಸತ್ತದ್ದಾಗಿದೆ.

2:18b.JAM.002.018 ಹೌದು, ಒಬ್ಬ ಮನುಷ್ಯನು--ನಿನಗೆ ನಂಬಿಕೆಯುಂಟು, ನನಗೆ ಕ್ರಿಯೆಗಳುಂಟು; ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆ ಯನ್ನು ನನಗೆ ತೋರಿಸು; ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ನಿನಗೆ ತೋರಿಸುತ್ತೇನೆ ಎಂದು ಹೇಳಬಹುದು.

2:19b.JAM.002.019 ದೇವರು ಒಬ್ಬನೇ ಎಂದು ನೀನು ನಂಬುವವನು, ನೀನು ಒಳ್ಳೇದು ಮಾಡುತ್ತೀ. ದೆವ್ವಗಳು ಕೂಡ ಹಾಗೆಯೇ ನಂಬಿ ನಡುಗುತ್ತವೆ.

2:20b.JAM.002.020 ಆದರೆ ಓ ವ್ಯರ್ಥವಾದವನೇ, ಕ್ರಿಯೆಗಳಿಲ್ಲದ ನಂಬಿಕೆಯು ಸತ್ತದ್ದೆಂದು ತಿಳಿದುಕೊಳ್ಳಲು ನಿನಗೆ ಇಷ್ಟವಿದೆಯೋ?

2:21b.JAM.002.021 ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿ ನಿರ್ಣಯವನ್ನು ಹೊಂದಿದ್ದು ಕ್ರಿಯೆಗಳಿಂದಲ್ಲವೇ?

2:22b.JAM.002.022 ಅವನ ನಂಬಿಕೆಯು ಹೇಗೆ ತನ್ನ ಕ್ರಿಯೆಗಳೊಂದಿಗೆ ಕಾರ್ಯ ನಡಿಸಿ ಆ ಕ್ರಿಯೆ ಗಳಿಂದಲೇ ನಂಬಿಕೆಯು ಸಿದ್ಧಿಗೆ ಬಂತೆಂಬದನ್ನು ನೀನು ಕಾಣುತ್ತೀಯಲ್ಲಾ?

2:23b.JAM.002.023 ಹೀಗೆ--ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು ಎಂಬ ಬರಹವು ಹೇಳುವಂತೆ ನೆರವೇರಿತು. ಅವನು ದೇವರ ಸ್ನೇಹಿತ ನೆಂದು ಕರೆಯಲ್ಪಟ್ಟನು.

2:24b.JAM.002.024 ಹೀಗೆ ಮನುಷ್ಯನು ಕ್ರಿಯೆ ಗಳಿಂದ ನೀತಿವಂತನೆಂದು ನಿರ್ಣಯಿಸಲ್ಪಡುತ್ತಾನೆ ಹೊರತು ಬರೀ ನಂಬಿಕೆಯಿಂದಲ್ಲವೆಂದು ನೀವು ನೋಡುತ್ತೀರಿ.

2:25b.JAM.002.025 ಅದೇ ರೀತಿಯಾಗಿ ಸೂಳೆಯಾದ ರಹಾಬಳು ಸಹ ಗೂಢಚಾರರನ್ನು ಸೇರಿಸಿಕೊಂಡು ಬೇರೆ ದಾರಿಯಿಂದ ಅವರನ್ನು ಕಳುಹಿಸಿದ್ದರಲ್ಲಿ ಕ್ರಿಯೆಗಳಿಂದಲೇ ನೀತಿ ನಿರ್ಣಯವನ್ನು ಹೊಂದ ಲಿಲ್ಲವೇ?ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದೇ.

2:26b.JAM.002.026 ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದೇ.

3

3:1b.JAM.003.001 ನನ್ನ ಸಹೋದರರೇ, ಬೋಧಕರಾದ ನಮಗೆ ದೊಡ್ಡ ದಂಡನೆಯಾಗುವದೆಂದು ತಿಳಿದುಕೊಂಡು ಬಹುಮಂದಿ ಬೋಧಕರಾಗಬೇಡಿರಿ.

3:2b.JAM.003.002 ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ ಅವನು ಪರಿ ಪೂರ್ಣನೂ ತನ್ನ ದೇಹವನ್ನೆಲ್ಲಾ ಸ್ವಾಧೀನಪಡಿಸಿ ಕೊಳ್ಳುವದಕ್ಕೆ ಸಮರ್ಥನೂ ಆಗಿದ್ದಾನೆ.

3:3b.JAM.003.003 ಇಗೋ, ಕುದುರೆಗಳು ನಮಗೆ ವಿಧೇಯವಾಗುವ ಹಾಗೆ ಅವು ಗಳ ಬಾಯಿಗೆ ಕಡಿವಾಣ ಹಾಕುತ್ತೇವಲ್ಲಾ; ಆಗ ಅವುಗಳ ದೇಹವನ್ನೆಲ್ಲಾ ತಿರುಗಿಸುವದಕ್ಕೆ ಆಗುತ್ತದೆ.

3:4b.JAM.003.004 ಹಡಗುಗಳನ್ನು ಸಹ ನೋಡಿರಿ. ಅವು ಬಹು ದೊಡ್ಡವಾಗಿದ್ದರೂ ಬಲವಾದ ಗಾಳಿಯಿಂದ ಬಡಿಸಿ ಕೊಂಡು ಹೋಗುತ್ತವೆ. ಆದಾಗ್ಯೂ ಬಹು ಸಣ ಚುಕಾಣಿಯಿಂದ ಅವುಗಳನ್ನು ನಡಿಸುವವನು ತನ್ನ ಮನಸ್ಸಿಗೆ ಬಂದ ಕಡೆಗೆ ತಿರುಗಿಸುತ್ತಾನೆ.

3:5b.JAM.003.005 ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ. ಇಗೋ, ಎಷ್ಟು ಕೊಂಚ ಕಿಚ್ಚು ದೊಡ್ಡ ಕಾಡನ್ನು ಸುಡುತ್ತದೆ ನೋಡಿರಿ.

3:6b.JAM.003.006 ನಾಲಿಗೆಯು ಬೆಂಕಿಯೂ ದುಷ್ಟಲೋಕವೂ ಆಗಿದೆ. ಹೀಗೆ ಅದು ನಮ್ಮ ಅಂಗಗಳಲ್ಲಿ ಇದ್ದು ದೇಹವನ್ನೆಲ್ಲಾ ಹೊಲೆಮಾಡಿ ಪ್ರಕೃತಿಯ ಕ್ರಮಕ್ಕೆ ಬೆಂಕಿ ಹಚ್ಚುವ ಹಾಗೆಯೂ ನರಕದ ಬೆಂಕಿಯನ್ನು ಹಚ್ಚಿಕೊಳ್ಳುವ ದಾಗಿಯೂ ಇದೆ.

3:7b.JAM.003.007 ಮನುಷ್ಯ ಜಾತಿಯು ಸಕಲ ವಿಧವಾದ ಮೃಗ, ಪಕ್ಷಿ, ಸರ್ಪ, ಜಲಚರಗಳನ್ನು ಹತೋಟಿಗೆ ತರುವದುಂಟು ಮತ್ತು ತಂದದ್ದುಂಟು.

3:8b.JAM.003.008 ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋ ಟಿಗೆ ತರಲಾರನು. ಅದು ಸ್ವಾಧೀನವಾಗದ ಕೆಡುಕಾ ಗಿದೆ; ಮರಣಕರವಾದ ವಿಷದಿಂದ ತುಂಬಿ ಇದೆ.

3:9b.JAM.003.009 ಅದೇ ನಾಲಿಗೆಯಿಂದ ತಂದೆಯಾದ ದೇವರನ್ನು ಕೊಂಡಾಡುತ್ತೇವೆ; ಆದರಿಂದಲೇ ದೇವರ ಹೋಲಿಕೆಗೆ ಸರಿಯಾಗಿ ಉಂಟುಮಾಡಲ್ಪಟ್ಟ ಮನುಷ್ಯರನ್ನು ನಾವು ಶಪಿಸುತ್ತೇವೆ.

3:10b.JAM.003.010 ಅದೇ ಬಾಯಿಂದ ಆಶೀರ್ವಾದ ಮತ್ತು ಶಾಪ ಬರುತ್ತವೆ; ನನ್ನ ಸಹೋದರರೇ, ಇವುಗಳು ಹೀಗಿರಬಾರದು.

3:11b.JAM.003.011 ಒಂದೇ ಊಟೆಯು ಸಿಹಿನೀರನ್ನೂ ಕಹಿನೀರನ್ನೂ ಒಂದೇ ಸ್ಥಳದಿಂದ ಹೊರಡುವದುಂಟೇ?

3:12b.JAM.003.012 ನನ್ನ ಸಹೋದರರೇ, ಅಂಜೂರದ ಮರವು ಎಣ್ಣೇಮರದ ಕಾಯಿ ಬಿಡುವದೋ? ದ್ರಾಕ್ಷೇ ಬಳ್ಳಿಯಲ್ಲಿ ಅಂಜೂರದ ಹಣ್ಣಾಗುವದೋ? ಹಾಗೆಯೇ ಯಾವ ಊಟೆಯೂ ಉಪ್ಪು ನೀರನ್ನೂ ಸಿಹಿ ನೀರನ್ನೂ ಕೊಡಲಾರದು.

3:13b.JAM.003.013 ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಸಾತ್ವಿಕತ್ವದಲ್ಲಿ ತನ್ನ ಕ್ರಿಯೆಗಳನ್ನು ತೋರಿಸಲಿ.

3:14b.JAM.003.014 ಆದರೆ ಕಹಿಯಾದ ಹಗೆತನ ಮತ್ತು ಜಗಳ ನಿಮ್ಮ ಹೃದಯ ಗಳೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.

3:15b.JAM.003.015 ಅದು ಮೇಲಣಿಂದ ಬಂದ ಜ್ಞಾನವಲ್ಲ; ಅದು ಭೂಸಂಬಂಧ ವಾದದ್ದು, ಪ್ರಾಕೃತಭಾವವಾದದ್ದು, ದೆವ್ವಗಳಿಗೆ ಸಂಬಂಧಪಟ್ಟದ್ದು.

3:16b.JAM.003.016 ಹೊಟ್ಟೇಕಿಚ್ಚೂ ಜಗಳವೂ ಇರುವ ಕಡೆ ಗಲಿಬಿಲಿಯೂ ಸಕಲವಿಧವಾದ ಕೆಟ್ಟ ಕೃತ್ಯವೂ ಇರುವವು.

3:17b.JAM.003.017 ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.

3:18b.JAM.003.018 ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.

4

4:1b.JAM.004.001 ನಿಮ್ಮಲ್ಲಿ ಯುದ್ಧಗಳೂ ಕಾದಾಟಗಳೂ ಎಲ್ಲಿಂದ ಬರುತ್ತವೆ? ನಿಮ್ಮ ಇಂದ್ರಿಯ ಗಳಲ್ಲಿ ಹೊರಾಡುವ ಭೋಗಾಶೆಗಳಿಂದಲೇ ಅಲ್ಲವೇ.

4:2b.JAM.004.002 ನೀವು ಆಶಿಸಿದರೂ ಹೊಂದದೆ ಇದ್ದೀರಿ. ನೀವು ಕೊಲ್ಲುತ್ತೀರಿ, ಹೊಂದಲು ಅಪೇಕ್ಷಿಸುತ್ತೀರಿ, ಆದರೆ ಪಡೆಯಲಾರಿರಿ. ನೀವು ಕಾದಾಡುತ್ತೀರಿ, ಯುದ್ಧ ಮಾಡುತ್ತೀರಿ. ಆದಾಗ್ಯೂ ನೀವು ಬೇಡಿಕೊಳ್ಳದ ಕಾರಣ ನಿಮಗೇನೂ ದೊರೆಯಲಿಲ್ಲ.

4:3b.JAM.004.003 ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಗಳಿಗಾಗಿ ಉಪಯೋಗಿಸ ಬೇಕೆಂದು ತಪ್ಪಾಗಿ ಬೇಡಿಕೊಳ್ಳುವದರಿಂದ ನಿಮಗೆ ದೊರೆಯುವದಿಲ್ಲ.

4:4b.JAM.004.004 ವ್ಯಭಿಚಾರಿಗಳೇ, ವ್ಯಭಿಚಾರಿಣಿ ಯರೇ, ಇಹಲೋಕ ಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರ ಬೇಕೆಂದಿರುವವನು ದೇವರಿಗೆ ವೈರಿಯಾಗಿದ್ದಾನೆ.

4:5b.JAM.004.005 ಇದಲ್ಲದೆ--ನಮ್ಮಲ್ಲಿ ವಾಸವಾಗಿರುವ ಆತ್ಮನು ಅಭಿಮಾನತಾಪದಿಂದ ಹಂಬಲಿಸುತ್ತಾನೆಂಬ ಬರಹವು ವ್ಯರ್ಥವಾಗಿ ಹೇಳುತ್ತದೆ ಎಂದು ನೀವು ಭಾವಿಸು ತ್ತೀರೋ?

4:6b.JAM.004.006 ಆತನು ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದದರಿಂದ--ದೇವರು ಅಹಂಕಾರಿಗಳನ್ನು ಎದುರಿಸು ತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸು ತ್ತಾನೆ ಎಂದು ಆತನು ಹೇಳುತ್ತಾನೆ.

4:7b.JAM.004.007 ಹೀಗಿರಲಾಗಿ ದೇವರಿಗೆ ಒಳಗಾಗಿರಿ. ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿಹೋಗುವನು.

4:8b.JAM.004.008 ದೇವರ ಸವಿಾಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸವಿಾಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿ ಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ.

4:9b.JAM.004.009 ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ; ನಿಮ್ಮ ನಗೆಯು ದುಃಖಕ್ಕೂ ನಿಮ್ಮ ಸಂತೋಷವು ವ್ಯಥೆಗೂ ತಿರುಗಿಕೊಳ್ಳಲಿ.

4:10b.JAM.004.010 ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿ ಕೊಳ್ಳಿರಿ; ಆಗಲಾತನು ನಿಮ್ಮನ್ನು ಮೇಲಕ್ಕೆತ್ತುವನು.

4:11b.JAM.004.011 ಸಹೋದರರೇ, ಒಬ್ಬರ ವಿಷಯದಲ್ಲಿ ಒಬ್ಬರು ಕೆಟ್ಟದ್ದನ್ನು ಮಾತನಾಡಬೇಡಿರಿ. ಯಾವನಾದರೂ ತನ್ನ ಸಹೋದರನ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿದರೆ ಅಥವಾ ತನ್ನ ಸಹೋದರನ ವಿಷಯವಾಗಿ ತೀರ್ಪು ಮಾಡಿದರೆ ಅವನು ನ್ಯಾಯಪ್ರಮಾಣದ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿ ನ್ಯಾಯಪ್ರಮಾಣದ ವಿಷಯ ದಲ್ಲಿ

4:12b.JAM.004.012 ನ್ಯಾಯಪ್ರಮಾಣ ವನ್ನು ಕೊಟ್ಟಾತನು ಒಬ್ಬನೇ; ಆತನೇ ಉಳಿಸುವದಕ್ಕೂ ನಾಶ ಮಾಡುವದಕ್ಕೂ ಶಕ್ತನು. ಹೀಗಿರುವಾಗ ಮತ್ತೊಬ್ಬನ ವಿಷಯದಲ್ಲಿ ತೀರ್ಪುಮಾಡುವದಕ್ಕೆ ನೀನು ಯಾರು?

4:13b.JAM.004.013 ಈ ಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರುಷವಿದ್ದುಕೊಂಡು ಕೊಳ್ಳುವ ಮತ್ತು ಮಾರುವ ವ್ಯಾಪಾರವನ್ನು ಮಾಡಿ ಲಾಭವನ್ನು ಸಂಪಾದಿಸುತ್ತೇವೆ ಅನ್ನುವವರೇ, ಕೇಳಿರಿ.

4:14b.JAM.004.014 ನಾಳೆ ಏನಾಗುವದೋ ನಿಮಗೆ ತಿಳಿಯದು. ನಿಮ್ಮ ಜೀವ ಮಾನವು ಎಂಥದ್ದು? ಅದು ಸ್ವಲ್ಪ ಹೊತ್ತು ಕಾಣಿಸಿ ಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದೆ.

4:15b.JAM.004.015 ಆದದರಿಂದ--ಕರ್ತನ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ ಆ ಕೆಲಸವನ್ನಾಗಲಿ ಮಾಡುವೆವು ಎಂದು ನೀವು ಹೇಳತಕ್ಕದ್ದು.

4:16b.JAM.004.016 ಆದರೆ ನೀವು ನಿಮ್ಮ ಹೊಗಳಿಕೆಗಳಲ್ಲಿ ಸಂತೋಷಪಡುತ್ತೀರಿ. ಅಂಥ ಸಂತೋಷವೆಲ್ಲಾ ಕೆಟ್ಟದ್ದೇ.ಹೀಗಿರುವದರಿಂದ ಒಳ್ಳೇದನ್ನು ಮಾಡಬೇಕೆಂದು ತಿಳಿದು ಅದನ್ನು ಮಾಡದೆ ಇರುವವನಿಗೆ ಅದು ಪಾಪವಾಗಿದೆ.

4:17b.JAM.004.017 ಹೀಗಿರುವದರಿಂದ ಒಳ್ಳೇದನ್ನು ಮಾಡಬೇಕೆಂದು ತಿಳಿದು ಅದನ್ನು ಮಾಡದೆ ಇರುವವನಿಗೆ ಅದು ಪಾಪವಾಗಿದೆ.

5

5:1b.JAM.005.001 ಧನಿಕರೇ, ನಿಮಗೆ ಬರುವ ದುರ್ದಶೆ ಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ

5:2b.JAM.005.002 ನಿಮ್ಮ ಐಶ್ವರ್ಯವು ನಾಶವಾಗಿದೆ, ನಿಮ್ಮ ಬಟ್ಟೆಗಳಿಗೆ ನುಸಿ ಹಿಡಿದಿದೆ.

5:3b.JAM.005.003 ನಿಮ್ಮ ಚಿನ್ನ ಬೆಳ್ಳಿಗಳು ತುಕ್ಕು ಹಿಡಿದವೆ; ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು ಬೆಂಕಿಯಂತೆ ನಿಮ್ಮ ಮಾಂಸವನ್ನು ತಿಂದು ಬಿಡುವದು. ಕಡೇ ದಿನಗಳಿಗಾಗಿ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿ ದ್ದೀರಿ.

5:4b.JAM.005.004 ಇಗೋ, ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿ ದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ; ಕೊಯಿದವರ ಕೂಗು ಸೈನ್ಯಗಳ ಕರ್ತನ ಕಿವಿಗಳಲ್ಲಿ ಬಿದ್ದಿದೆ.

5:5b.JAM.005.005 ಭೂಲೋಕದಲ್ಲಿ ನೀವು ಭೋಗಿಗಳಾಗಿ ಮನಸ್ಸು ಬಂದಂತೆ ಜೀವಿಸಿದ್ದೀರಿ; ವಧೆಯ ದಿವಸಕ್ಕಾಗಿಯೇ ಎಂಬಂತೆ ನಿಮ್ಮ ಹೃದಯಗಳನ್ನು ಪೋಷಿಸಿಕೊಂಡಿದ್ದೀರಿ.

5:6b.JAM.005.006 ನೀತಿವಂತನಿಗೆ ದಂಡನೆಯನ್ನು ವಿಧಿಸಿ ಕೊಂದು ಹಾಕಿ ದ್ದೀರಿ; ಅವನು ನಿಮ್ಮನ್ನು ಎದುರಾಯಿಸುವವನಲ್ಲ.

5:7b.JAM.005.007 ಸಹೋದರರೇ, ಕರ್ತನು ಬರುವ ತನಕ ದೀರ್ಘ ಶಾಂತಿಯಿಂದಿರ್ರಿ. ವ್ಯವಸಾಯಗಾರನನ್ನು ನೋಡಿರಿ; ಅವನು ಭೂಮಿಯ ಅಮೂಲ್ಯವಾದ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು.

5:8b.JAM.005.008 ನೀವೂ ದೀರ್ಘಶಾಂತಿಯಿಂದಿರ್ರಿ; ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ, ಯಾಕಂದರೆ ಕರ್ತನ ಪ್ರತ್ಯ ಕ್ಷತೆಯು ಹತ್ತಿರವಾಯಿತು.

5:9b.JAM.005.009 ಸಹೋದರರೇ, ನೀವು ಒಬ್ಬರನ್ನೊಬ್ಬರು ದ್ವೇಷಿಸಬೇಡಿರಿ; ನ್ಯಾಯವಿಚಾರಣೆಗೆ ಗುರಿಯಾದೀರಿ. ಅಗೋ, ನ್ಯಾಯಾಧಿಪತಿಯು ಬಾಗಲಿನ ಮುಂದೆಯೇ ನಿಂತಿದ್ದಾನೆ.

5:10b.JAM.005.010 ನನ್ನ ಸಹೋದರರೇ, ಬಾಧೆಯನ್ನು ತಾಳ್ಮೆಯಿಂದ ಸಹಿಸಿ ಕೊಳ್ಳುವ ವಿಷಯದಲ್ಲಿ ಕರ್ತನ ಹೆಸರಿನಿಂದ ಮಾತ ನಾಡಿದ ಪ್ರವಾದಿಗಳನ್ನೇ ಮಾದರಿ ಮಾಡಿಕೊಳ್ಳಿರಿ.

5:11b.JAM.005.011 ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಎಣಿಸುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಬಹಳ ಕರುಣೆಯುಳ್ಳ ವನೂ ದಯಾಳುವೂ ಆಗಿದ್ದಾನೆಂದು ತಿಳಿದಿದ್ದೀರಷ್ಟೆ.

5:12b.JAM.005.012 ಮುಖ್ಯವಾಗಿ ನನ್ನ ಸಹೋದರರೇ, ಆಣೆ ಇಡಲೇ ಬೇಡಿರಿ; ಆಕಾಶದ ಮೇಲಾಗಲಿ ಭೂಮಿಯ ಮೇಲಾಗಲಿ ಇನ್ನಾವದರ ಮೇಲಾಗಲಿ ಆಣೆ ಇಡ ಬೇಡಿರಿ. ಹೌದೆಂದು ಹೇಳಬೇಕಾದರೆ ಹೌದೆನ್ನಿರಿ, ಅಲ್ಲವೆನ್ನಬೇಕಾದರೆ ಅಲ್ಲವೆನ್ನಿರಿ; ಹೀಗಾದರೆ ನೀವು ನ್ಯಾಯವಿಚಾರಣೆಗೆ ಗುರಿಯಾಗುವದಿಲ್ಲ.

5:13b.JAM.005.013 ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದಾನೋ? ಅವನು ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷಪಡುವವನಿದ್ದಾನೋ? ಅವನು ಕೀರ್ತನೆಗಳನ್ನು ಹಾಡಲಿ.

5:14b.JAM.005.014 ನಿಮ್ಮಲ್ಲಿ ಯಾವ ನಾದರೂ ಅಸ್ವಸ್ಥನಾಗಿರುವವನು ಇದ್ದಾನೋ? ಅವನು ಸಭೆಯ ಹಿರಿಯರನ್ನು ಕರೇಕಳುಹಿಸಲಿ; ಅವರು ಕರ್ತನ ಹೆಸರಿನಿಂದ ಎಣ್ಣೆಹಚ್ಚಿ ಅವನಿಗೋಸ್ಕರ ಪ್ರಾರ್ಥಿಸಲಿ.

5:15b.JAM.005.015 ನಂಬಿಕೆಯಿಂದ ಮಾಡಿದ ಪ್ರಾರ್ಥನೆ ಯು ರೋಗಿಯನ್ನು ರಕ್ಷಿಸುವದು; ಕರ್ತನು ಅವನನ್ನು ಎಬ್ಬಿಸುವನು, ಪಾಪಗಳನ್ನು ಮಾಡಿದವನಾಗಿದ್ದರೆ ಅವು ಕ್ಷಮಿಸಲ್ಪಡುವವು.

5:16b.JAM.005.016 ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ.

5:17b.JAM.005.017 ಎಲೀಯನು ನಮ್ಮಂಥ ಸ್ವಭಾವವುಳ್ಳವ ನಾಗಿದ್ದನು; ಅವನು ಮಳೆ ಬರಬಾರದೆಂದು ಆಸಕ್ತಿ ಯಿಂದ ಪ್ರಾರ್ಥಿಸಲು ಮೂರು ವರುಷ ಆರು ತಿಂಗಳ ವರೆಗೂ ಮಳೆ ಬೀಳಲಿಲ್ಲ.

5:18b.JAM.005.018 ತಿರಿಗಿ ಅವನು ಪ್ರಾರ್ಥನೆ ಮಾಡಲು ಆಕಾಶವು ಮಳೆಗರೆಯಿತು, ಭೂಮಿಯು ಬೆಳೆಯಿತು.

5:19b.JAM.005.019 ಸಹೋದರರೇ, ನಿಮ್ಮಲ್ಲಿ ಯಾವನಾದರೂ ಸತ್ಯ ದಿಂದ ತಪ್ಪಿಹೋಗಿರಲಾಗಿ ಮತ್ತೊಬ್ಬನು ಅವನನ್ನು ಯಥಾಸ್ಥಾನಕ್ಕೆ ತಂದರೆಅವನು ಪಾಪಮಾಡಿದವ ನನ್ನು ತಪ್ಪಾದ ಮಾರ್ಗದಿಂದ ತಿರುಗಿಸಿದ್ದಲ್ಲದೆ ಅವನ ಆತ್ಮವನ್ನು ಮರಣಕ್ಕೆ ತಪ್ಪಿಸಿ ಬಹುಪಾಪಗಳನ್ನು ಮುಚ್ಚಿದವನಾದನೆಂದು ತಿಳುಕೊಳ್ಳಲಿ.

5:20b.JAM.005.020 ಅವನು ಪಾಪಮಾಡಿದವ ನನ್ನು ತಪ್ಪಾದ ಮಾರ್ಗದಿಂದ ತಿರುಗಿಸಿದ್ದಲ್ಲದೆ ಅವನ ಆತ್ಮವನ್ನು ಮರಣಕ್ಕೆ ತಪ್ಪಿಸಿ ಬಹುಪಾಪಗಳನ್ನು ಮುಚ್ಚಿದವನಾದನೆಂದು ತಿಳುಕೊಳ್ಳಲಿ.


Holder of rights
Multilingual Bible Corpus

Citation Suggestion for this Object
TextGrid Repository (2025). Kannada Collection. James (Kannada). James (Kannada). Multilingual Parallel Bible Corpus. Multilingual Bible Corpus. https://hdl.handle.net/21.11113/0000-0016-A21F-F