1 Peter (Kannada)

1 Peter (Kannada)

1

1:1b.1PE.001.001 ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ ಗಲಾತ್ಯ ಕಪ್ಪದೋಕ್ಯ ಆಸ್ಯ ಬಿಥೊನ್ಯ ಇವುಗಳಲ್ಲೆಲ್ಲಾ ಚದರಿರುವ ಪರದೇಶಸ್ಥರಿಗೆ

1:2b.1PE.001.002 ಪವಿತ್ರಾತ್ಮನಿಂದ ಪ್ರತಿಷ್ಟಿಸಲ್ಪಟ್ಟವರಾಗಿ ವಿಧೇಯರಾ ಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗು ವದಕ್ಕೂ ತಂದೆಯಾದ ದೇವರ ಭವಿಷ್ಯದ್‌ ಜ್ಞಾನಾನು ಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇ ನಂದರೆ--ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.

1:3b.1PE.001.003 ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ಜೀವಕರವಾದ ನಿರೀಕ್ಷೆಗೂ

1:4b.1PE.001.004 ಲಯ ಕಳಂಕ ಕ್ಷಯಗಳಿಲ್ಲದ ಬಾಧ್ಯತೆಗೂ ನಮ್ಮನ್ನು ತಿರಿಗಿ ಹುಟ್ಟಿಸಿದ್ದಾನೆ. ಈ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿದೆ.

1:5b.1PE.001.005 ಅಂತ್ಯ ಕಾಲದಲ್ಲಿ ಪ್ರಕಟವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ನಂಬಿಕೆಯ ಮುಖಾಂತರ ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.

1:6b.1PE.001.006 ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ಕಷ್ಟಗಳಲ್ಲಿ ದುಃಖಿಸುವವ ರಾಗಿದ್ದರೂ ಬಹಳವಾಗಿ ಹರ್ಷಿಸುವವರಾಗಿದ್ದೀರಿ.

1:7b.1PE.001.007 ಭಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವದುಂಟಷ್ಟೆ. ಭಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವಮಾನ ಗಳನ್ನು ಉಂಟುಮಾಡುವದು.

1:8b.1PE.001.008 ನೀವು ಆತನನ್ನು ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ; ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.

1:9b.1PE.001.009 ನಿಮ್ಮ ನಂಬಿಕೆಯ ಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿದ್ದೀರಿ.

1:10b.1PE.001.010 ನಿಮಗೆ ಬರಬೇಕಾಗಿದ್ದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.

1:11b.1PE.001.011 ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಪ್ರಭಾವವನ್ನೂ ಮುಂದಾಗಿ ಸಾಕ್ಷೀಕರಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವ ನೆಂಬದನ್ನು ಅವರು ಪರಿಶೋಧನೆ ಮಾಡಿದರು.

1:12b.1PE.001.012 ಪರಲೋಕದಿಂದ ಕಳುಹಿಸಲ್ಪಟ್ಟ ಪರಿಶುದ್ಧಾತ್ಮನಿಂದ ನಿಮಗೆ ಸುವಾರ್ತೆಯನ್ನು ಸಾರಿದವರು ಈಗ ನಿಮಗೆ ತಿಳಿಸುವಂಥ ಮತ್ತು ದೂತರು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುವಂಥ ಕಾರ್ಯಗಳಲ್ಲಿ ತಮಗೋಸ್ಕರವಲ್ಲ ನಮಗೋಸ್ಕರವೇ ಸೇವೆ ಮಾಡಿದರೆಂದು ಅವರಿಗೆ ಪ್ರಕಟವಾಯಿತು.

1:13b.1PE.001.013 ಆದದರಿಂದ ನೀವು ಮನಸ್ಸಿನ ನಡುವನ್ನು ಕಟ್ಟಿ ಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷ ನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನೀರಿಕ್ಷೆಯನ್ನು ಅಂತ್ಯದವರೆಗೆ ಇಡಿರಿ.

1:14b.1PE.001.014 ನೀವು ಮುಂಚೆ ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ

1:15b.1PE.001.015 ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾದ ಮಕ್ಕಳಿಗೆ ತಕ್ಕಂತೆ ನಿಮ್ಮ ಎಲ್ಲಾ ನಡವಳಿಕೆಯಲ್ಲಿ ಪರಿಶುದ್ಧರಾಗಿರ್ರಿ.

1:16b.1PE.001.016 ನಾನು ಪರಿಶುದ್ಧನಾಗಿರುವದರಿಂದ ನೀವೂ ಪರಿಶುದ್ಧ ರಾಗಿರಬೇಕು ಎಂದು ಬರೆದದೆಯಲ್ಲಾ.

1:17b.1PE.001.017 ಪ್ರತಿಯೊಬ್ಬನ ಕೆಲಸವನ್ನು ನೋಡಿ ಪಕ್ಷಪಾತ ವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆ ಯೆಂದು ಬೇಡಿಕೊಳ್ಳುವವರಾಗಿರಲಾಗಿ ನಿಮ್ಮ ಪ್ರವಾಸ ಕಾಲವನ್ನು ಭಯದಿಂದ ಕಳೆಯಿರಿ.

1:18b.1PE.001.018 ನಿಮ್ಮ ತಂದೆ ಗಳಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿ ಬಂಗಾರದಿಂದಲ್ಲ;

1:19b.1PE.001.019 ಆದರೆ ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯ ರಕ್ತ ದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.

1:20b.1PE.001.020 ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟು ಈ ಅಂತ್ಯ ಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು.

1:21b.1PE.001.021 ಹೀಗಿರ ಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರುವಂತೆ ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ವಿಶ್ವಾಸವಿಟ್ಟವರಾದಿರಷ್ಟೆ.

1:22b.1PE.001.022 ನೀವು ಆತ್ಮನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟ ವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರ ಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.

1:23b.1PE.001.023 ೀವು ತಿರಿಗಿ ಹುಟ್ಟಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ. ನಾಶವಾಗದ ಬೀಜ ದಿಂದಲೇ ಉಂಟಾದದ್ದು ಅದು ದೇವರ ಸದಾ ಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು.

1:24b.1PE.001.024 ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಮನುಷ್ಯನ ಪ್ರಭಾವವೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವದು, ಅದರ ಹೂವು ಉದುರಿ ಹೋಗು ವದು;ಕರ್ತನ ಮಾತೋ ಸದಾಕಾಲವೂ ಇರು ವದು. ಅದು ಯಾವದಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.

1:25b.1PE.001.025 ಕರ್ತನ ಮಾತೋ ಸದಾಕಾಲವೂ ಇರು ವದು. ಅದು ಯಾವದಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.

2

2:1b.1PE.002.001 ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೇ ಕಿಚ್ಚನ್ನೂ ಎಲ್ಲಾ ಕೆಟ್ಟ ಮಾತುಗಳನ್ನೂ ವಿಸರ್ಜಿಸಿರಿ.

2:2b.1PE.002.002 ಹೊಸದಾಗಿ ಹುಟ್ಟಿದ ಶಿಶುಗಳಂತಿರುವ ನೀವು ಬೆಳೆಯುವ ಹಾಗೆ ವಾಕ್ಯವೆಂಬ ಶುದ್ಧ ಹಾಲನ್ನು ಬಯಸಿರಿ.

2:3b.1PE.002.003 ಕರ್ತನು ಕೃಪಾಳುವೆಂದು ನೀವು ರುಚಿ ನೋಡಿದ್ದೀರಲ್ಲಾ.

2:4b.1PE.002.004 ನೀವು ಜೀವವುಳ್ಳ ಕಲ್ಲಾಗಿರು ವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲು ಮನುಷ್ಯರಿಂದ ನಿಜವಾಗಿಯೂ ನಿರಾಕರಿಸಲ್ಪಟ್ಟಿದ್ದರೂ ಅದು ದೇವ ರಿಂದ ಆಯಲ್ಪಟ್ಟದ್ದೂ ಅಮೂಲ್ಯವಾದದ್ದೂ ಆಯಿತು.

2:5b.1PE.002.005 ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.

2:6b.1PE.002.006 ಇದಲ್ಲದೆ--ಇಗೋ, ಚೀಯೋನಿನಲ್ಲಿ ಮೂಲೆ ಗಲ್ಲನ್ನು ಇಡುತ್ತೇನೆ; ಅದು ಆಯಲ್ಪಟ್ಟದ್ದು, ಅಮೂಲ್ಯ ವಾದದ್ದು; ಆತನ ಮೇಲೆ ನಂಬಿಕೆಯಿಡುವವನು ಆಶಾಭಂಗ ಪಡುವದೇ ಇಲ್ಲ ಎಂದು ಬರಹದಲ್ಲಿ ಇರುತ್ತದೆ.

2:7b.1PE.002.007 ಆದದರಿಂದ ನಂಬುವವರಾದ ನಿಮಗೆ ಆತನು ಅಮೂಲ್ಯನಾಗಿದ್ದಾನೆ. ಅವಿಧೇಯರಿಗಾ ದರೋ ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.

2:8b.1PE.002.008 ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.

2:9b.1PE.002.009 ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.

2:10b.1PE.002.010 ಮೊದಲು ನೀವು ಪ್ರಜೆಯಾಗಿರಲಿಲ್ಲ, ಈಗ ದೇವರ ಪ್ರಜೆ ಯಾಗಿದ್ದೀರಿ; ಮೊದಲು ಕರುಣೆ ಹೊಂದಿರಲಿಲ್ಲ, ಈಗ ಕರುಣೆ ಹೊಂದಿದವರಾಗಿದ್ದೀರಿ.

2:11b.1PE.002.011 ಅತಿ ಪ್ರಿಯರೇ, ಪರದೇಶಸ್ಥರೂ ಪ್ರವಾಸಿಗಳೂ ಆಗಿರುವ ನೀವು ನಿಮ್ಮ ಆತ್ಮಕ್ಕೆ ವಿರೋಧವಾಗಿ ಯುದ್ಧಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿ ರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

2:12b.1PE.002.012 ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ಸತ್ಕ್ರಿಯೆಗಳನ್ನು ಕಣ್ಣಾರೆಕಂಡು ದರ್ಶಿಸುವ ದಿನದಲ್ಲಿ ದೇವರನ್ನು ಕೊಂಡಾಡುವರು.

2:13b.1PE.002.013 ಮನುಷ್ಯನ ಪ್ರತಿಯೊಂದು ಕಟ್ಟಳೆಗೂ ಕರ್ತನ ನಿಮಿತ್ತ ನೀವು ಅಧೀನರಾಗಿರ್ರಿ. ಅರಸನು ಸರ್ವಾಧಿಕಾರಿ ಎಂತಲೂ

2:14b.1PE.002.014 ಅಧಿಪತಿಗಳು ಕೆಟ್ಟವರನ್ನು ದಂಡಿಸು ವದಕ್ಕೂ ಒಳ್ಳೆಯವರನ್ನು ಪ್ರೋತ್ಸಾಹಪಡಿಸುವದಕ್ಕೂ (ಅರಸನಿಂದ) ಅವರು ಕಳುಹಿಸಲ್ಪಟ್ಟವರೆಂತಲೂ ತಿಳಿದು ಅವರಿಗೆ ಅಧೀನರಾಗಿರ್ರಿ.

2:15b.1PE.002.015 ನೀವು ಒಳ್ಳೇ ನಡತೆಯಿಂದ ತಿಳುವಳಿಕೆಯಿಲ್ಲದ ಮೂಢಜನರ ಬಾಯಿ ಮುಚ್ಚುವಂತೆ ಮಾಡುವದೇ ದೇವರ ಚಿತ್ತ.

2:16b.1PE.002.016 ಸ್ವತಂತ್ರರಾಗಿರ್ರಿ; ಆದರೆ ಕೆಟ್ಟತನವನ್ನು ಮರೆಮಾಡು ವದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿರಿ; ನೀವು ದೇವರ ದಾಸರಾಗಿದ್ದೀರಿ.

2:17b.1PE.002.017 ಎಲ್ಲರನ್ನು ಸನ್ಮಾನಿ ಸಿರಿ, ಸಹೋದರರನ್ನು ಪ್ರೀತಿಸಿರಿ, ದೇವರಿಗೆ ಭಯ ಪಡಿರಿ, ಅರಸನನ್ನು ಸನ್ಮಾನಿಸಿರಿ.

2:18b.1PE.002.018 ಸೇವಕರೇ, ನಿಮ್ಮ ಯಜಮಾನರಿಗೆ ಪೂರ್ಣ ಭಯದಿಂದ ಅಧೀನ ರಾಗಿರ್ರಿ. ಒಳ್ಳೆಯವರೂ ಸಾತ್ವಿಕರೂ ಆಗಿರುವವರಿಗೆ ಮಾತ್ರವಲ್ಲದೆ ವಕ್ರಬುದ್ಧಿಯುಳ್ಳವರಿಗೂ ವಿಧೇಯ ರಾಗಿರ್ರಿ.

2:19b.1PE.002.019 ಒಬ್ಬನು ಅನ್ಯಾಯವಾಗಿ ಬಾಧೆಪಡುವವ ನಾಗಿದ್ದು ದೇವರ ವಿಷಯವಾದ ಮನಸ್ಸಾಕ್ಷಿಗೋಸ್ಕರ ಆ ದುಃಖವನ್ನು ಸಹಿಸಿಕೊಂಡರೆ ಅದು ಶ್ಲಾಘ್ಯವಾಗಿದೆ.

2:20b.1PE.002.020 ತಪ್ಪುಮಾಡಿ ಗುದ್ದು ತಿನ್ನುವದರಲ್ಲಿ ನೀವು ತಾಳ್ಮೆ ಯಿಂದಿದ್ದರೆ ಅದರಿಂದೇನು ಹೆಚ್ಚಳ? ಆದರೆ ಒಳ್ಳೇ ದನ್ನು ಮಾಡಿ ಬಾಧೆಪಡುವದರಲ್ಲಿ ನೀವು ತಾಳ್ಮೆಯಿಂದಿ ದ್ದರೆ ಇದು ದೇವರಿಗೆ ಅಂಗೀಕೃತವಾಗಿದೆ.

2:21b.1PE.002.021 ಇದ ಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ನಮಗೆ ಮಾದರಿಯನ್ನು ಬಿಟ್ಟು ಹೋದನು.

2:22b.1PE.002.022 ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ.

2:23b.1PE.002.023 ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ; ಆತನು ಬಾಧೆಯನ್ನನು ಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನನ್ನು ಒಪ್ಪಿಸಿದನು.

2:24b.1PE.002.024 ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.

2:25b.1PE.002.025 ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.

3

3:1b.1PE.003.001 ಅದೇ ರೀತಿಯಾಗಿ ಸ್ತ್ರೀಯರೇ, ನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ. ಯಾರಾದರೂ ವಾಕ್ಯಕ್ಕೆ ಅವಿಧೇಯರಾಗಿದ್ದರೂ ಹೆಂಡತಿಯರ ನಡತೆಯಿಂದ ವಾಕ್ಯವಿಲ್ಲದೆ ಅವರನ್ನು ಗೆಲ್ಲುವಂತೆ

3:2b.1PE.003.002 ನಿಮ್ಮ ನಿರ್ಮಲವಾದ ಮತ್ತು ಭಯಭರಿತವಾದ ನಡತೆಯನ್ನು ಅವರು ನೋಡಲಿ.

3:3b.1PE.003.003 ಜಡೆ ಹೆಣೆದುಕೊ ಳ್ಳುವದೂ ಚಿನ್ನದ ಒಡವೆಗಳನ್ನು ಇಟ್ಟುಕೊಳ್ಳುವದೂ ಇಲ್ಲವೆ ಉಡಿಗೆಗಳನ್ನು ಧರಿಸಿಕೊಳ್ಳುವದೂ ಈ ಹೊರ ಗಣ ಅಲಂಕಾರವು ಬೇಡ.

3:4b.1PE.003.004 ಆದರೆ ಸಾತ್ವಿಕವಾದ ಶಾಂತ ಮನಸ್ಸು ಎಂಬ ಹೃದಯದ ಮರೆಯಾದ ಮನುಷ್ಯನ ಅಲಂಕಾರವೇ ನಿಮಗಿರಲಿ. ಇದು ಅಕ್ಷಯ ವಾಗಿದ್ದು ದೇವರ ದೃಷ್ಟಿಗೆ ಬಹು ಬೆಲೆಯುಳ್ಳದ್ದಾಗಿದೆ.

3:5b.1PE.003.005 ಪೂರ್ವಕಾಲದಲ್ಲಿ ದೇವರ ಮೇಲೆ ನಂಬಿಕೆಯಿಟ್ಟ ಪರಿಶುದ್ಧ ಸ್ತ್ರೀಯರು ಸಹ ಹೀಗೆಯೇ ತಮ್ಮನ್ನು ಆಲಂಕರಿಸಿಕೊಂಡರು; ಅವರು ತಮ್ಮ ತಮ್ಮ ಗಂಡಂ ದಿರಿಗೆ ಅಧೀನರಾಗಿದ್ದರು.

3:6b.1PE.003.006 ಹಾಗೆಯೇ ಸಾರಳು ಅಬ್ರಹಾಮನಿಗೆ ವಿಧೇಯಳಾಗಿದ್ದು ಅವನನ್ನು ಯಜಮಾನ ಎಂದು ಕರೆದಳು. ನೀವು ಸಾರಳ ಕುಮಾರ್ತೆಗಳಾಗಿದ್ದೀರಲ್ಲಾ; ನೀವು ಒಳ್ಳೇದನ್ನು ಮಾಡುವದಾದರೆ ಯಾವ ಭೀತಿಗೂ ಗಾಬರಿ ಪಡುವದಿಲ್ಲ.

3:7b.1PE.003.007 ಅದೇ ರೀತಿಯಾಗಿ ಪುರಷರೇ, ಸ್ತ್ರೀಯು ಬಲಹೀನ ಳೆಂಬದನ್ನು ತಿಳಿದು ನಿಮ್ಮ ಹೆಂಡತಿಯರ ಸಂಗಡ ವಿವೇಕದಿಂದ ಇರ್ರಿ. ಅವರು ಜೀವದ ಕೃಪೆಯಲ್ಲಿ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಮಾನವನ್ನು ಸಲ್ಲಿಸಿರಿ. ಹೀಗೆ ನಡೆದರೆ ನಿಮ್ಮ ಪ್ರಾರ್ಥನೆಗಳಿಗೆ ಅಡ್ಡಿಯಿರುವದಿಲ್ಲ.

3:8b.1PE.003.008 ಕಡೆಗೆ ನೀವೆಲ್ಲರೂ ಏಕ ಮನಸ್ಸುಳ್ಳವರಾಗಿರ್ರಿ; ಒಬ್ಬರಿಗೊಬ್ಬರು ಕರುಣೆಯುಳ್ಳವರಾಗಿದ್ದು ಸಹೋದರ ರಂತೆ ಪ್ರೀತಿಸಿರಿ; ಕನಿಕರವೂ ದೀನ ಭಾವವೂ ಉಳ್ಳವರಾಗಿರ್ರಿ.

3:9b.1PE.003.009 ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿ ರೆಂದು ನಿಮಗೆ ತಿಳಿದದೆಯಲ್ಲಾ.

3:10b.1PE.003.010 ಜೀವವನ್ನು ಪ್ರೀತಿಸಿ ಸುದಿನಗಳನ್ನು ನೋಡುವದಕ್ಕೆ ಇಷ್ಟವುಳ್ಳವನು ಕೆಟ್ಟ ದ್ದನ್ನು ನುಡಿಯದಂತೆ ತನ್ನ ನಾಲಿಗೆಯನ್ನೂ ವಂಚನೆಯ ಮಾತುಗಳನ್ನಾಡದ ಹಾಗೆ ತನ್ನ ತುಟಿಗಳನ್ನೂ ಬಿಗಿ ಹಿಡಿಯಲಿ.

3:11b.1PE.003.011 ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೇದನ್ನು ಮಾಡಲಿ; ಸಮಾಧಾನವನ್ನು ಹುಡುಕಿ ಅದಕ್ಕೋಸ್ಕರ ಪ್ರಯತ್ನಪಡಲಿ.

3:12b.1PE.003.012 ಕರ್ತನ ದೃಷ್ಟಿ ನೀತಿವಂತರ ಮೇಲಿದೆ. ಆತನು ಅವರ ಪ್ರಾರ್ಥನೆಗಳಿಗೆ ಕಿವಿ ಗೊಡುತ್ತಾನೆ; ಕೆಟ್ಟದ್ದನ್ನು ಮಾಡುವವರಿಗೆ ಕರ್ತನ ಮುಖವು ವಿರೋಧವಾಗಿದೆ.

3:13b.1PE.003.013 ನೀವು ಒಳ್ಳೇದನ್ನು ಅನುಸರಿಸುವವರಾಗಿದ್ದರೆ ನಿಮಗೆ ಕೇಡು ಮಾಡುವವರು ಯಾರಿದ್ದಾರೆ?

3:14b.1PE.003.014 ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ಸಂತೋಷವುಳ್ಳವರು. ಅವರ ಬೆದರಿಸುವಿಕೆಗೆ ಹೆದರಬೇಡಿರಿ ಮತ್ತು ಕಳವಳ ಪಡಬೇಡಿರಿ.

3:15b.1PE.003.015 ಆದರೆ ದೇವರಾದ ಕರ್ತನನ್ನು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠೆಪಡಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ಕೇಳುವವರೆಲ್ಲರಿಗೆ ಸಾತ್ವಿಕತ್ವ ದಿಂದಲೂ ಭಯದಿಂದಲೂ ಉತ್ತರ ಹೇಳುವದಕ್ಕೆ ಯಾವಾಗಲೂ ಸಿದ್ಧವಾಗಿರ್ರಿ;

3:16b.1PE.003.016 ಒಳ್ಳೇಮನಸ್ಸಾಕ್ಷಿ ಯುಳ್ಳವರಾಗಿರ್ರಿ; ಆಗ ನೀವು ಕೆಟ್ಟದ್ದನ್ನು ಮಾಡುವವ ರೆಂದು ನಿಮ್ಮ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡಿ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೇ ನಡವಳಿಕೆಯ ವಿಷಯವಾಗಿ ಸುಳ್ಳಾಗಿ ದೂರು ಹೇಳುವವರು ನಾಚಿಕೆಪಡುವವರು.

3:17b.1PE.003.017 ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವದಕ್ಕಿಂತ ಒಳ್ಳೇನಡತೆಯುಳ್ಳವರಾಗಿಯೇ ದೇವರ ಚಿತ್ತವಿದ್ದರೆ ಬಾಧೆಪಡುವದು ಲೇಸು.

3:18b.1PE.003.018 ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.

3:19b.1PE.003.019 ಆತನು ಆತ್ಮನಿಂದಲೇ ಸೆರೆಯಲ್ಲಿದ್ದ ಆತ್ಮಗಳಿಗೆ ಹೋಗಿ ಸಾರಿದನು;

3:20b.1PE.003.020 ಆದರೆ ನೋಹನ ದಿನಗಳಲ್ಲಿ ನಾವೆಯನ್ನು ಕಟ್ಟುತ್ತಿರಲು ದೇವರ ದೀರ್ಘಶಾಂತಿಯು ಒಂದು ಸಾರಿ ಕಾದಿದ್ದಾಗ ಆತನಿಗೆ ಅವಿಧೇಯರಾ ಗಿದ್ದವರ ಬಳಿಗೆ ಹೋಗಿ ಆತನು ಸಾರಿದನು. ಆ ನಾವೆಯೊಳಗೆ ಕೆಲವರು ಅಂದರೆ ಎಂಟೇ ಜನರು ನೀರಿನ ಮೂಲಕ ರಕ್ಷಣೆ ಹೊಂದಿದರು.

3:21b.1PE.003.021 ಆ ನೀರಿಗೆ ಅನುರೂಪವಾದ ಬಾಪ್ತಿಸ್ಮವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; (ಅದು ಮೈಕೊಳೆಯನ್ನು ಹೋಗಲಾಡಿ ಸುವಂಥದ್ದಲ್ಲ. ಆದರೆ ದೇವರ ಕಡೆಗಿರುವ ನಮ್ಮ ಒಳ್ಳೇ ಮನಸ್ಸಾಕ್ಷಿಯ ಉತ್ತರವಾಗಿದೆ).ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.

3:22b.1PE.003.022 ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.

4

4:1b.1PE.004.001 ಕ್ರಿಸ್ತನು ಶರೀರದಲ್ಲಿ ನಮಗೋಸ್ಕರ ಬಾಧೆಪಟ್ಟದ್ದರಿಂದ ನೀವು ಸಹ ಆತನಿಗಿದ್ದ ಮನಸ್ಸನ್ನು ಧರಿಸಿಕೊಳ್ಳಿರಿ. ಯಾಕಂದರೆ ಶರೀರ ದಲ್ಲಿ ಬಾಧೆಪಟ್ಟವನು ಪಾಪಮಾಡುವದನ್ನು ನಿಲ್ಲಿಸಿ ಬಿಟ್ಟಿದ್ದಾನೆ.

4:2b.1PE.004.002 ಹೀಗೆ ಶರೀರದಲ್ಲಿ ಇನ್ನು ಉಳಿದಿರುವ ತನ್ನ ಜೀವಿತಕಾಲದಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವನು.

4:3b.1PE.004.003 ಬಂಡುತನ ದುರಾಶೆ ಕುಡಿಕತನ ದುಂದೌತನ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಗಳು ಇವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದದ್ದನ್ನು ಮಾಡುವದರಲ್ಲಿಯೂ ನಮ್ಮ ಜೀವಿತ ದಲ್ಲಿ ಕಳೆದುಹೋದ ಕಾಲವೇ ಸಾಕು.

4:4b.1PE.004.004 ತಾವು ಮಾಡುವ ಅಪರಿಮಿತವಾದ ಪಟಿಂಗತನದಲ್ಲಿ ನೀವು ಅವರೊಂದಿಗೆ ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯ ಪಟ್ಟು ನಿಮ್ಮನ್ನು ದೂಷಿಸುತ್ತಾರೆ.

4:5b.1PE.004.005 ಅವರು ಬದುಕುವ ವರಿಗೂ ಸತ್ತವರಿಗೂ ನ್ಯಾಯತೀರಿಸುವದಕ್ಕಾಗಿ ಸಿದ್ಧ ವಾಗಿರುವಾತನಿಗೆ ಲೆಕ್ಕ ಒಪ್ಪಿಸುವರು.

4:6b.1PE.004.006 ಈ ಕಾರಣದಿಂದ ಸತ್ತಿರುವವರು ಶರೀರದಲ್ಲಿ ಮನುಷ್ಯರಿಗೆ ತಕ್ಕಂತೆ ನ್ಯಾಯತೀರ್ಪನ್ನು ಹೊಂದಿ ಆತ್ಮದಲ್ಲಿ ದೇವರಿಗಾಗಿ ಜೀವಿಸುವಂತೆ ಅವರಿಗೂ ಸುವಾರ್ತೆ ಸಾರಲ್ಪಟ್ಟಿತು.

4:7b.1PE.004.007 ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ; ಆದದರಿಂದ ನೀವು ಸ್ವಸ್ಥಚಿತ್ತರಾಗಿಯೂ ಪ್ರಾರ್ಥನೆಗೆ ಎಚ್ಚರ ವಾಗಿಯೂ ಇರ್ರಿ.

4:8b.1PE.004.008 ಎಲ್ಲವುಗಳಿಗೆ ಮಿಗಿಲಾಗಿ ನಿಮ್ಮ ನಿಮ್ಮೊಳಗೆ ಯಥಾರ್ಥವಾದ ಪ್ರೀತಿಯಿರಲಿ; ಯಾಕಂದರೆ ಪ್ರೀತಿಯು ಎಷ್ಟೋ ಪಾಪಗಳನ್ನು ಮುಚ್ಚುತ್ತದೆ.

4:9b.1PE.004.009 ಗುಣುಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ.

4:10b.1PE.004.010 ನೀವೆಲ್ಲರು ದೇವರ ವಿವಿಧ ಕೃಪೆಯ ವಿಷಯದಲ್ಲಿ ಒಳ್ಳೇ ಮನೆವಾರ್ತೆಯವರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ವರವನ್ನು ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ.

4:11b.1PE.004.011 ಒಬ್ಬನು ಬೋಧಿಸು ವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಮಹಿಮೆ ಉಂಟಾಗುವದು. ಯೇಸು ಕ್ರಿಸ್ತನಿಗೆ ಸ್ತೋತ್ರವೂ ಆಧಿಪತ್ಯವೂ

4:12b.1PE.004.012 ಪ್ರಿಯರೇ, ನಿಮ್ಮನ್ನು ಶೋಧಿಸುವದಕ್ಕೆ ಅಗ್ನಿ ಯಂತಿರುವ ಪರಿಶೋಧನೆಗಾಗಿ ನೀವು ಆಶ್ಚರ್ಯಪಡ ಬೇಡಿರಿ; ಅಪೂರ್ವವಾದ ಸಂಗತಿ ನಿಮಗೆ ಸಂಭವಿಸಿ ತೆಂದು ಯೋಚಿಸಬೇಡಿರಿ.

4:13b.1PE.004.013 ನೀವು ಕ್ರಿಸ್ತನ ಬಾಧೆ ಗಳಲ್ಲಿ ಪಾಲುಗಾರರಾಗಿರುವದರಿಂದ ಸಂತೋಷವುಳ್ಳ ವರಾಗಿರ್ರಿ; ಇದಲ್ಲದೆ ಆತನ ಮಹಿಮೆಯ ಪ್ರತ್ಯಕ್ಷತೆ ಯಲ್ಲಿ ನೀವು ಸಂತೋಷಪಟ್ಟು ಅತ್ಯಂತ ಉಲ್ಲಾಸಗೊಳ್ಳುವಿರಿ.

4:14b.1PE.004.014 ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಸಂತೋಷಪಡಿರಿ; ಯಾಕಂದರೆ ಮಹಿಮೆ ಯುಳ್ಳ ದೇವರ ಆತ್ಮನು ನಿಮ್ಮ ಮೇಲೆ ನೆಲೆಗೊಂಡಿ ದ್ದಾನಲ್ಲಾ. ಅವರ ವಿಷಯದಲ್ಲಿ ಆತನು ದೂಷಿಸ ಲ್ಪಡುತ್ತಾನೆ; ಆದರೆ ನಿಮ್ಮ ವಿಷಯದಲ್ಲಿ ಆತನು ಮಹಿಮೆ ಹೊಂದುತ್ತಾನೆ.

4:15b.1PE.004.015 ನಿಮ್ಮಲ್ಲಿ ಯಾವನಾದರೂ ಕೊಲೆಗಾರನು ಕಳ್ಳನು ದುಷ್ಟನು ಪರರಕಾರ್ಯಗಳಲ್ಲಿ ತಲೆಹಾಕುವವನು ಆಗಿದ್ದು ಬಾಧೆಯನ್ನನುಭವಿಸ ಬಾರದು.

4:16b.1PE.004.016 ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆ ಪಡದೆ ಅದರಲ್ಲಿಯೇ ದೇವರನ್ನು ಘನಪಡಿಸಲಿ.

4:17b.1PE.004.017 ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯ ತೀರ್ಪಿನ ಸಮಯವು ಬಂದದೆ; ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರುವದು?

4:18b.1PE.004.018 ನೀತಿವಂತನೇ ರಕ್ಷಣೆಹೊಂದುವದು ಕಷ್ಟವಾದರೆ ಭಕ್ತಿಹೀನನೂ ಪಾಪಿಷ್ಠನೂ ನಿಲ್ಲುವದು ಎಲ್ಲಿ?ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡು ವವರು ಒಳ್ಳೇದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿಕರ್ತನಿಗೆ ಒಪ್ಪಿಸಲಿ.

4:19b.1PE.004.019 ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡು ವವರು ಒಳ್ಳೇದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿಕರ್ತನಿಗೆ ಒಪ್ಪಿಸಲಿ.

5

5:1b.1PE.005.001 ಜೊತೆ ಹಿರಿಯನೂ ಕ್ರಿಸ್ತನ ಶ್ರಮೆಗಳ ಸಾಕ್ಷಿಯೂ ಪ್ರತ್ಯಕ್ಷವಾಗಲಿರುವ ಪ್ರಭಾವ ದಲ್ಲಿ ಪಾಲುಗಾರನು ಆಗಿರುವ ನಾನು ನಿಮ್ಮಲ್ಲಿರುವ ಹಿರಿಯರನ್ನು ಎಚ್ಚರಿಸುವದೇನಂದರೆ,

5:2b.1PE.005.002 ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ; ಬಲಾತ್ಕಾರದಿಂದಲ್ಲ, ಆದರೆ ಇಷ್ಟಪೂರ್ವಕವಾಗಿಯೂ; ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿ ಚಾರಣೆ ಮಾಡಿರಿ.

5:3b.1PE.005.003 ದೇವರ ಸ್ವಾಸ್ಥ್ಯದ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ.

5:4b.1PE.005.004 ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ.

5:5b.1PE.005.005 ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.

5:6b.1PE.005.006 ಹೀಗಿರುವದರಿಂದ ದೇವರ ತ್ರಾಣವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ತರುವನು.

5:7b.1PE.005.007 ನಿಮ್ಮ ಚಿಂತೆಯನ್ನೆಲ್ಲಾ ಆತನ ಮೇಲೆ ಹಾಕಿರಿ, ಆತನು ನಿಮಗೋಸ್ಕರ ಚಿಂತಿಸುತ್ತಾನೆ.

5:8b.1PE.005.008 ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.

5:9b.1PE.005.009 ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ; ಲೋಕದಲ್ಲಿರುವ ನಿಮ್ಮ ಸಹೋದರರಿಗೂ ಅಂಥ ಬಾಧೆಗಳೇ ಸಂಭವಿಸುತ್ತವೆಯೆಂದು ನಿಮಗೆ ತಿಳಿದದೆಯಲ್ಲಾ.

5:10b.1PE.005.010 ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣ ನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಪರಿಪೂರ್ಣ ಮಾಡಿ ಸ್ಥಿರಪಡಿಸಿ ಬಲಪಡಿಸಿ ನೆಲೆಗೊಳಿಸುವನು.

5:11b.1PE.005.011 ಆತನಿಗೆ ಮಹಿಮೆಯೂ ಅಧಿಪತ್ಯವೂ ಯುಗಯುಗಾಂತರ ಗಳಲ್ಲಿ ಇರಲಿ. ಆಮೆನ್‌.

5:12b.1PE.005.012 ನಿಮ್ಮನ್ನು ಎಚ್ಚರಿಸುವದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವದಕ್ಕೂ ನಿಮಗೆ ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನಿಂದ ಸಂಕ್ಷೇಪವಾಗಿ ಇದನ್ನು ಬರೆದಿದ್ದೇನೆ. ಈ ನಿಜವಾದ ಕೃಪೆಯಲ್ಲಿ ನೀವು ನಿಂತವರಾಗಿದ್ದೀರಿ.

5:13b.1PE.005.013 ನಿಮ್ಮೊಂದಿಗೆ ಆರಿಸಿಕೊಂಡಂಥ ಬಾಬೆಲಿನಲ್ಲಿರುವ ಸಭೆಯು ನಿಮಗೆ ವಂದನೆ ಹೇಳುತ್ತದೆ. ನನ್ನ ಮಗನಾದ ಮಾರ್ಕನು ಸಹ ವಂದನೆಹೇಳುತ್ತಾನೆ.ಪ್ರೀತಿಯಿಂದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮೆಲ್ಲರಿಗೆ ಶಾಂತಿಯಿರಲಿ. ಆಮೆನ್‌.

5:14b.1PE.005.014 ಪ್ರೀತಿಯಿಂದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮೆಲ್ಲರಿಗೆ ಶಾಂತಿಯಿರಲಿ. ಆಮೆನ್‌.


Holder of rights
Multilingual Bible Corpus

Citation Suggestion for this Object
TextGrid Repository (2025). Kannada Collection. 1 Peter (Kannada). 1 Peter (Kannada). Multilingual Parallel Bible Corpus. Multilingual Bible Corpus. https://hdl.handle.net/21.11113/0000-0016-A222-A