3 John (Kannada)

3 John (Kannada)

1

1:1b.3JO.001.001 ಹಿರಿಯನಾದ ಸತ್ಯದಲ್ಲಿ ಬಹಳವಾಗಿ ಪ್ರೀತಿಸುವ ಗಾಯನಿಗೆ--

1:2b.3JO.001.002 ಪ್ರಿಯನೇ, ನಿನ್ನ ಆತ್ಮವು ಅಭಿವೃದಿ ಹೊಂದಿರುವ ಪ್ರಕಾರವೇ ಎಲ್ಲಾ ವಿಷಯಗಳಿಗಿಂತ ನೀನು ಸ್ವಸ್ಥನಾಗಿದ್ದು ಕ್ಷೇಮಹೊಂದಿ ಅಭಿವೃದ್ಧಿಯಾಗ ಬೇಕೆಂದು ನಾನು ಅಪೇಕ್ಷಿಸುತ್ತೇನೆ.

1:3b.3JO.001.003 ಸಹೋದರರು ಬಂದಾಗ ನಿನ್ನಲ್ಲಿರುವ ಸತ್ಯವನ್ನು ಸಾಕ್ಷೀಕರಿಸಿದ್ದರಿಂದ ನಾನು ಬಹಳವಾಗಿ ಸಂತೋಷಪಟ್ಟೆನು.

1:4b.3JO.001.004 ನನ್ನ ಮಕ್ಕಳು ಸತ್ಯವನ್ನನುಸರಿಸಿ ನಡೆಯುವವರಾಗಿದ್ದಾರೆಂದು ಕೇಳುವ ದಕ್ಕಿಂತ ಹೆಚ್ಚಾದ ಸಂತೋಷವು ನನಗಿಲ್ಲ.

1:5b.3JO.001.005 ಪ್ರಿಯನೇ, ಸಹೋದರರಿಗೂ ಪರಿಚಯವಿಲ್ಲದವ ರಿಗೂ ನೀನು ಮಾಡುವದನ್ನೆಲ್ಲಾ ನಂಬಿಗಸ್ತನಾಗಿ ಮಾಡುತ್ತೀ.

1:6b.3JO.001.006 ಅವರು ಸಭೆಯ ಮುಂದೆ ನಿನ್ನ ಪ್ರೀತಿಗೆ ಸಾಕ್ಷಿ ಹೇಳಿದರು. ಅವರನ್ನು ನೀನು ಭಕ್ತಿಪೂರ್ವಕವಾಗಿ ಸಾಗ ಕಳುಹಿಸಿದರೆ ನೀನು ಒಳ್ಳೇದು ಮಾಡುತ್ತೀ.

1:7b.3JO.001.007 ಯಾಕಂದರೆ ಅವರು ಆತನ ಹೆಸರಿನ ನಿಮಿತ್ತವಾಗಿ ಹೊರಟು ಹೋಗಿದ್ದಾರೆ; ಅನ್ಯಜನಗಳಿಂದ ಏನೂ ತೆಗೆದುಕೊಳ್ಳುವವರಲ್ಲ.

1:8b.3JO.001.008 ಆದದರಿಂದ ನಾವು ಸತ್ಯಕ್ಕೆ ಸಹಕಾರಿಗಳಾಗುವಂತೆ ಅಂಥವರನ್ನು ಸೇರಿಸಿಕೊಳ್ಳುವ ಹಂಗಿನಲ್ಲಿದ್ದೇವೆ.

1:9b.3JO.001.009 ಸಭೆಗೆ ನಾನು ಬರೆದಿದ್ದೆನು; ಆದರೆ ಸಭೆಯವರಲ್ಲಿ ಪ್ರಮುಖನಾಗಬೇಕೆಂದಿರುವ ದಿಯೊತ್ರೇಫನು ನಮ್ಮನ್ನು ಅಂಗೀಕರಿಸುವದಿಲ್ಲ.

1:10b.3JO.001.010 ಆದಕಾರಣ ನಾನು ಬಂದರೆ ಅವನು ಮಾಡುವ ಕೃತ್ಯಗಳನ್ನು ಜ್ಞಾಪಕ ಮಾಡುವೆನು. ಅವನು ಹರಟೆ ಕೊಚ್ಚುವವನಾಗಿ ನಮ ವಿಷಯದಲ್ಲಿ ಕೆಟ್ಟಕೆಟ್ಟ ಮಾತುಗಳನ್ನಾಡುತ್ತಾನೆ. ಇವೂ ಸಾಲದೆ ಸಹೋದರರನ್ನು ಸೇರಿಸಿಕೊಳ್ಳಬೇಕೆಂದಿ ರುವವರಿಗೆ ಅಡ್ಡಿ ಮಾಡುತ್ತಾ ತಾನೂ ಅವರನ್ನು ಸೇರಿಸಿಕೊಳ್ಳ

1:11b.3JO.001.011 ಪ್ರಿಯನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೇದನ್ನು ಅನುಸರಿಸು; ಒಳ್ಳೇದನ್ನು ಮಾಡುವವನು ದೇವರಿಗೆ ಸಂಬಂಧಪಟ್ಟವನಾಗಿದ್ದಾನೆ, ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ.

1:12b.3JO.001.012 ದೇಮೇತ್ರಿ ಯನು ಎಲ್ಲರಿಂದಲೂ ಸತ್ಯದಿಂದಲೂ ಒಳ್ಳೇ ಸಾಕ್ಷಿ ಹೊಂದಿದ್ದಾನೆ. ಹೌದು, ನಾವು ಸಹ ಸಾಕ್ಷಿ ಹೇಳುವವ ರಾಗಿದ್ದೇವೆ, ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀವು ಬಲ್ಲಿರಿ.

1:13b.3JO.001.013 ನಾನು ಬರೆಯತಕ್ಕ ಅನೇಕ ವಿಷಯಗಳಿದ್ದವು; ಆದರೆ ಮಸಿ ಲೇಖಣಿಗಳಿಂದ ನಿನಗೆ ಬರೆಯುವದಕ್ಕೆ ನನಗಿಷ್ಟವಿಲ್ಲ.ಬೇಗನೆ ನಿನ್ನನ್ನು ನೋಡುವೆನೆಂದು ನಿರೀಕ್ಷಿಸುತ್ತೇನೆ; ಆಗ ಮುಖಾಮುಖಿಯಾಗಿ ನಾವು ಮಾತನಾಡುವೆವು. ನಿನಗೆ ಶಾಂತಿ ಇರಲಿ. ನಮ್ಮ ಸ್ನೇಹಿತರು ನಿನಗೆ ವಂದನೆ ಹೇಳುತ್ತಾರೆ. ಸ್ನೇಹಿತರನು ಹೆಸರ್ಹೆಸರಾಗಿ ವಂದಿಸು.

1:14b.3JO.001.014 ಬೇಗನೆ ನಿನ್ನನ್ನು ನೋಡುವೆನೆಂದು ನಿರೀಕ್ಷಿಸುತ್ತೇನೆ; ಆಗ ಮುಖಾಮುಖಿಯಾಗಿ ನಾವು ಮಾತನಾಡುವೆವು. ನಿನಗೆ ಶಾಂತಿ ಇರಲಿ. ನಮ್ಮ ಸ್ನೇಹಿತರು ನಿನಗೆ ವಂದನೆ ಹೇಳುತ್ತಾರೆ. ಸ್ನೇಹಿತರನು ಹೆಸರ್ಹೆಸರಾಗಿ ವಂದಿಸು.


Holder of rights
Multilingual Bible Corpus

Citation Suggestion for this Object
TextGrid Repository (2025). Kannada Collection. 3 John (Kannada). 3 John (Kannada). Multilingual Parallel Bible Corpus. Multilingual Bible Corpus. https://hdl.handle.net/21.11113/0000-0016-A22E-E