Revelation (Kannada)

Revelation (Kannada)

1

1:1b.REV.001.001 ಯೇಸು ಕ್ರಿಸ್ತನ ಪ್ರಕಟನೆಯು ಆತನು ಬೇಗನೆ ಸಂಭವಿಸತಕ್ಕವುಗಳನ್ನು ತನ್ನ ಸೇವಕರಿಗೆ ತೋರಿಸುವದಕ್ಕಾಗಿ ದೇವರು ಈ ಪ್ರಕಟನೆ ಯನ್ನು ಆತನಿಗೆ ಕೊಟ್ಟನು; ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಅದನ್ನು ತನ್ನ ಸೇವಕನಾದ ಯೋಹಾನನಿಗೆ ಸೂಚಿಸಿದ

1:2b.REV.001.002 ಯೋಹಾನನು ದೇವರ ವಾಕ್ಯದ ವಿಷಯವಾಗಿಯೂ ಯೇಸು ಕ್ರಿಸ್ತನ ವಿಷಯವಾಗಿಯೂ ತಾನು ಕಂಡದ್ದನ್ನೆಲ್ಲ ತಿಳಿಸುವವನಾಗಿ ಸಾಕ್ಷಿಕೊಟ್ಟನು.

1:3b.REV.001.003 ಇದನ್ನು ಓದುವಂಥ ವನೂ ಈ ಪ್ರವಾದನಾ ವಾಕ್ಯಗಳನ್ನು ಕೇಳುವಂಥವರೂ ಅದರಲ್ಲಿ ಬರೆದಿರುವಂಥವುಗಳನ್ನು ಕಾಪಾಡುವಂಥ ವರೂ ಧನ್ಯರು. ಯಾಕಂದರೆ ಕಾಲವು ಸವಿಾಪವಾಗಿದೆ.

1:4b.REV.001.004 ಯೋಹಾನನು ಆಸ್ಯದಲ್ಲಿರುವ ಏಳು ಸಭೆಗ ಳಿಗೆ--ಇರುವಾತನೂ ಇದ್ದಾತನೂ ಬರುವಾತನೂ ಆಗಿರುವಾತನಿಂದಲೂ ಆತನ ಸಿಂಹಾಸನದ ಮುಂದಿ ರುವ ಏಳು ಆತ್ಮಗಳಿಂದಲೂ ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದು ಬಂದಾತನೂ ಭೂರಾಜರ ಪ್ರಭುವೂ ಆಗಿರುವ ಯೇಸು ಕ್ರಿಸ್ತ ನಿಂದ

1:5b.REV.001.005 ಆತನು ನಮ್ಮನ್ನು ಪ್ರೀತಿಸಿ ತನ್ನ ಸ್ವಂತ ರಕ್ತದಿಂದ ನಮ್ಮನ್ನು ನಮ್ಮ ಪಾಪಗಳಿಂದ ತೊಳೆದು

1:6b.REV.001.006 ತನ್ನ ತಂದೆ ಯಾದ ದೇವರಿಗೆ ನಮ್ಮನ್ನು ರಾಜರನ್ನಾಗಿಯೂ ಯಾಜಕ ರನ್ನಾಗಿಯೂ ಮಾಡಿದನು. ಆತನಿಗೆ ಯುಗ ಯುಗಾಂತರಗಳಲ್ಲಿ ಮಹಿಮೆಯೂ ಅಧಿಪತ್ಯವೂ ಇರಲಿ. ಆಮೆನ್‌.

1:7b.REV.001.007 ಇಗೋ ಆತನು ಮೇಘಗ ಳೊಂದಿಗೆ ಬರುತ್ತಾನೆ; ಎಲ್ಲರ ಕಣ್ಣುಗಳು ಆತನನ್ನು ಕಾಣುವವು; ಆತನನ್ನು ಇರಿದವರು ಸಹ ಕಾಣುವರು; ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ಗೋಳಾಡುವರು. ಹೌದು, ಹಾಗೆಯೇ ಆಗುವದು. ಆಮೆನ್‌.

1:8b.REV.001.008 ನಾನೇ ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಇರುವಾತನೂ ಇದ್ದಾತನೂ ಮತ್ತು ಬರು ವಾತನೂ ಸರ್ವಶಕ್ತನೂ ಆಗಿದ್ದೇನೆ ಎಂದು ಕರ್ತನು ಹೇಳುತ್ತಾನೆ.

1:9b.REV.001.009 ನಿಮ್ಮ ಸಹೋದರನೂ ಯೇಸು ಕ್ರಿಸ್ತನ ನಿಮಿತ್ತ ಸಂಕಟದಲ್ಲಿ ರಾಜ್ಯದಲ್ಲಿ ಮತ್ತು ತಾಳ್ಮೆಯಲ್ಲಿ ಜೊತೆ ಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸು ಕ್ರಿಸ್ತನ ವಿಷಯವಾದ ಸಾಕ್ಷೀಗೋಸ್ಕರವೂ ಪತ್ಮೊಸ್‌ ಎಂದು ಕರೆಯಲ್ಪಟ್ಟ ದ್ವೀಪದಲ್ಲಿದ್ದೆನು.

1:10b.REV.001.010 ನಾನು ಕರ್ತನ ದಿನದಲ್ಲಿ ಆತ್ಮನ ವಶದಲ್ಲಿದ್ದಾಗ ನನ್ನ ಹಿಂದುಗಡೆ ತುತೂರಿಯ ಶಬ್ದದಂತಿ ರುವ ಮಹಾಶಬ್ದವನ್ನು ಕೇಳಿದೆನು.

1:11b.REV.001.011 ಅದು--ನಾನೇ ಅಲ್ಫಾವೂ ಓಮೆಗವೂ ಮೊದಲನೆಯವನೂ ಕಡೆ ಯವನೂ ಆಗಿದ್ದೇನೆ; ನೀನು ನೋಡುವದನ್ನೂ ಪುಸ್ತಕದಲ್ಲಿ ಬರೆದು ಆಸ್ಯದಲ್ಲಿನ ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್‌, ಫಿಲದೆಲ್ಫಿಯ, ಲವೊದಿಕೀಯ ಎಂಬ ಈ ಏಳು ಸಭೆಗಳಿಗೆ ಅದನ್ನು ಕಳುಹಿಸಬೇಕೆಂದು ಹೇಳಿತು.

1:12b.REV.001.012 ನನ್ನ ಸಂಗಡ ಮಾತ ನಾಡುತ್ತಿದ್ದ ಶಬ್ದವನ್ನು ನೋಡುವದಕ್ಕಾಗಿ ಹಿಂದಕ್ಕೆ ತಿರುಗಿದೆನು. ತಿರುಗಿದಾಗ ಚಿನ್ನದ ಏಳು ದೀಪಸ್ತಂಭ ಗಳನ್ನು ನಾನು ನೋಡಿದೆನು.

1:13b.REV.001.013 ಆ ಏಳು ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಕುಮಾರನಂತಿದ್ದಾತನನ್ನು ಕಂಡೆನು. ಆತನು ಪಾದದವರೆಗೆ ಇರುವ ನಿಲುವಂಗಿಯನ್ನು ತೊಟ್ಟು ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು.

1:14b.REV.001.014 ಆತನ ತಲೆ ಮತ್ತು ಕೂದಲು ಬಿಳೀ ಉಣ್ಣೆಯಂತೆಯೂ ಹಿಮದಂತೆಯೂ ಬೆಳ್ಳಗಿತ್ತು. ಆತನ ಕಣ್ಣುಗಳು ಬೆಂಕಿಯ ಉರಿಯಂತೆ ಇದ್ದವು.

1:15b.REV.001.015 ಆತನ ಪಾದಗಳು ಕುಲುಮೆ ಯಲ್ಲಿ ಕಾಯಿಸಿದ ಶುದ್ಧವಾದ ತಾಮ್ರದಂತೆಯೂ ಆತನ ಧ್ವನಿಯು ಜಲಪ್ರವಾಹದ ಘೋಷದಂತೆಯೂ ಇದ್ದವು.

1:16b.REV.001.016 ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು; ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಟಿತು. ಆತನ ಮುಖವು ಸೂರ್ಯನು ತನ್ನ ಬಲದಲ್ಲಿ ಪ್ರಕಾಶಿಸುವಂತಿತ್ತು.

1:17b.REV.001.017 ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.

1:18b.REV.001.018 ಸತ್ತವನಾದೆನು,ಈಗ ಬದುಕುವವನಾಗಿದ್ದೇನೆ. ಇಗೋ, ನಾನು ಎಂದೆಂ ದಿಗೂ ಬದುಕುವವನಾಗಿದ್ದೇನೆ. ಆಮೆನ್‌. ನರಕದ ಮತ್ತು ಮರಣದ ಬೀಗದ ಕೈಗಳೂ ನನ್ನಲ್ಲಿ ಅವೆ.

1:19b.REV.001.019 ನೀನು ಕಂಡವುಗಳನ್ನೂ ಈಗ ನಡೆಯುತ್ತಿರುವವು ಗಳನ್ನೂ ಇನ್ನು ಮುಂದೆ ಆಗಬೇಕಾದವುಗಳನ್ನೂ ಬರೆ.ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಮರ್ಮವನ್ನು ಬರೆ. ಆ ಏಳು ನಕ್ಷತ್ರಗಳು ಆ ಏಳು ಸಭೆಗಳ ದೂತರು; ನೀನು ಕಂಡ ಆ ಏಳು ದೀಪಸ್ತಂಭಗಳು ಆ ಏಳು ಸಭೆಗಳು ಎಂದು ಹೇಳಿದನು.

1:20b.REV.001.020 ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಮರ್ಮವನ್ನು ಬರೆ. ಆ ಏಳು ನಕ್ಷತ್ರಗಳು ಆ ಏಳು ಸಭೆಗಳ ದೂತರು; ನೀನು ಕಂಡ ಆ ಏಳು ದೀಪಸ್ತಂಭಗಳು ಆ ಏಳು ಸಭೆಗಳು ಎಂದು ಹೇಳಿದನು.

2

2:1b.REV.002.001 ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ: ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡುಕೊಂಡು ಏಳು ಚಿನ್ನದ ದೀಪ ಸ್ತಂಭಗಳ ಮಧ್ಯದಲ್ಲಿ ತಿರುಗಾಡುವಾತನು ಈ ವಿಷಯಗಳನ್ನು ಹೇಳುತ್ತಾನೆ.

2:2b.REV.002.002 ನಿನ್ನ ಕ್ರಿಯೆಗಳನ್ನೂ ಪ್ರಯಾಸವನ್ನೂ ತಾಳ್ಮೆಯನ್ನೂ ನಾನು ಬಲ್ಲೆನು; ನೀನು ದುಷ್ಟರನ್ನು ಸಹಿಸಲಾರಿ; ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು, ನೀನು ಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿ;

2:3b.REV.002.003 ನೀನು ಸಹಿಸಿ ಕೊಂಡು ತಾಳ್ಮೆಯುಳ್ಳವನಾಗಿ ನನ್ನ ಹೆಸರಿನ ನಿಮಿತ್ತ ಪ್ರಯಾಸಪಟ್ಟು ಬೇಸರಗೊಳ್ಳಲಿಲ್ಲ.

2:4b.REV.002.004 ಆದಾಗ್ಯೂ ನಿನ್ನಲ್ಲಿ ನನಗೆ ವಿರೋಧವಾದದ್ದು ಇದೆ. ಯಾಕಂದರೆ ನೀನು ನಿನ್ನ ಮೊದಲಿನ ಪ್ರೀತಿಯನ್ನು ಬಿಟ್ಟುಬಿಟ್ಟಿದ್ದೀ.

2:5b.REV.002.005 ಆದದ ರಿಂದ ನೀನು ಎಲ್ಲಿಂದ ಬಿದ್ದಿದ್ದೀಯೋ ಅದನ್ನು ನಿನ್ನ ನೆನಪಿಗೆ ತಂದುಕೊಂಡು ಮಾನಸಾಂತರಪಡು. ನೀನು ಮೊದಲು ಮಾಡುತ್ತಿದ್ದ ಕ್ರಿಯೆಗಳನ್ನು ಮಾಡು. ನೀನು ಮಾನಸಾಂತರಪಡದೆ ಹೋದರೆ ನಾನು ನಿನ್ನ ಬಳಿಗೆ ಬೇಗನೆ ಬಂದು ನಿನ್ನ ದೀಪ ಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುವೆನು

2:6b.REV.002.006 ಆದರೆ ಇದು ನಿನ್ನಲ್ಲಿ ಇದೆ; ಅದೇನಂದರೆ--ನೀನು ದ್ವೇಷಿಸುವ ನಿಕೊಲಾಯಿ ತರ ಕೃತ್ಯಗಳನ್ನು ನಾನು ಸಹ ದ್ವೇಷಿಸುತ್ತೇನೆ.

2:7b.REV.002.007 ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನ ಮಧ್ಯದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.

2:8b.REV.002.008 ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ: ಮೊದ ಲನೆಯವನೂ ಕಡೆಯವನೂ ಸತ್ತವನಾಗಿದ್ದು ಈಗ ಬದುಕುವಾತನೂ ಹೇಳುವವುಗಳು ಯಾವವೆಂದರೆ,

2:9b.REV.002.009 ನಾನು ನಿನ್ನ ಕೃತ್ಯಗಳನ್ನೂ ಸಂಕಟವನ್ನೂ ಬಡತನವನೂ ಬಲ್ಲೆನು; (ಆದರೂ ನೀನು ಐಶ್ವರ್ಯವಂತನೇ). ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳು ವವರ ದೂಷಣೆಯನ್ನು ನಾನು ಬಲ್ಲೆನು; ಅವರು ಯೆಹೂದ್ಯರಲ್ಲ, ಸೈತಾನನ ಸಭಾಮಂದಿರದವರಾಗಿ ದ್ದಾರೆ.

2:10b.REV.002.010 ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ

2:11b.REV.002.011 ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ; ಜಯಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವದೇ ಇಲ್ಲ.

2:12b.REV.002.012 ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಬರೆ: ಹದವಾದ ಇಬ್ಬಾಯಿ ಕತ್ತಿಯನ್ನು ಹಿಡಿದಾತನು ಹೇಳು ವವುಗಳು ಯಾವವೆಂದರೆ,

2:13b.REV.002.013 ನಿನ್ನ ಕ್ರಿಯೆಗಳನ್ನೂ ನೀನು ವಾಸಮಾಡುವ ಸ್ಥಳವನ್ನೂ ಬಲ್ಲೆನು; ಅದು ಸೈತಾನನ ಆಸನವಿರುವ ಸ್ಥಳವಾಗಿದೆ; ನೀನು ನನ್ನ ಹೆಸರನ್ನು ಬಿಗಿಯಾಗಿ ಹಿಡುಕೊಂಡಿದ್ದೀ; ನಿಮ್ಮಲ್ಲಿರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನಾದ ಹತಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿ ಯಾದರೂ ನ

2:14b.REV.002.014 ಆದರೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವ ದಕ್ಕೂ ಜಾರತ್ವ ಮಾಡುವದಕ್ಕೂ ಇಸ್ರಾಯೇಲಿನ ಮಕ್ಕಳ ಮುಂದೆ ಮುಗ್ಗರಿಸುವ ಬಂಡೆಯನ್ನು ಹಾಕ ಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ಬೋಧನೆಯನ್ನು

2:15b.REV.002.015 ಅದರಂತೆ ನಾನು ಹಗೆ ಮಾಡುವ ನಿಕೊಲಾಯಿತರ ಬೋಧನೆಯನ್ನು ಅವಲಂಬಿಸಿರುವವರೂ ನಿನ್ನಲ್ಲಿದ್ದಾರೆ.

2:16b.REV.002.016 ಆದದರಿಂದ ಮಾನಸಾಂತರಪಡು, ಇಲ್ಲದಿದ್ದರೆ ನಾನು ನಿನ್ನ ಬಳಿಗೆ ಬೇಗನೆ ಬಂದು ನನ್ನ ಬಾಯಿ ಕತ್ತಿಯಿಂದ ಅವರ ಮೇಲೆ ಯುದ್ಧ ಮಾಡುವೆನು.

2:17b.REV.002.017 ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನೂ ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವನ್ನು ತಿನ್ನುವದಕ್ಕೆ ನಾನು ಕೊಡು ವೆನು; ಇದಲ್ಲದೆ ಅವನಿಗೆ ಹೊಸ ಹೆಸರು ಬರೆದಿರುವ ಬಿಳೀ ಕಲ್ಲನ್ನು ಕೊಡುವೆನು ಅದನ್ನು ಹೊಂದಿದವನಿಗೇ ಹೊರತು ಅದು ಇನ್ನಾರಿಗೂ ತಿ

2:18b.REV.002.018 ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ: ಬೆಂಕಿಯ ಉರಿಯಂತಿರುವ ಕಣ್ಣುಗಳೂ ಶುದ್ಧವಾದ ತಾಮ್ರದಂತಿರುವ ಪಾದಗಳುಳ್ಳ ದೇವಕುಮಾರನು ಹೇಳುವವುಗಳು ಯಾವವೆಂದರೆ,

2:19b.REV.002.019 ನಿನ್ನ ಕ್ರಿಯೆ ಗಳನ್ನೂ ಪ್ರೀತಿಯನ್ನೂ ಸೇವೆಯನ್ನೂ ನಂಬಿಕೆಯನ್ನೂ ನಿನ್ನ ತಾಳ್ಮೆಯನ್ನೂ ನಿನ್ನ ಕ್ರಿಯೆಗಳನ್ನೂ ನಾನು ಬಲ್ಲೆನು; ಇದಲ್ಲದೆ ನಿನ್ನ ಕಡೇ ಕೃತ್ಯಗಳು ಮೊದಲಿನ ಕೃತ್ಯಗಳಿಗಿಂತ ಹೆಚ್ಚಾದವುಗಳೆಂದು ಬಲ್ಲೆನು.

2:20b.REV.002.020 ಆದಾಗ್ಯೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ; ಅದೇ ನಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿ ನಿಯೆಂದು ಹೇಳಿಕೊಂಡು ಜಾರತ್ವ ಮಾಡುವದಕ್ಕೂ ವಿಗ್ರಹಗಳಿಗೆ ಅರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವದಕ್ಕೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ವಂಚಿಸುತ್ತಿರು

2:21b.REV.002.021 ಅವಳು ಮಾಡಿದ ಜಾರತ್ವಕ್ಕಾಗಿ ಮಾನ ಸಾಂತರಪಡುವದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು; ಆದರೆ ಅವಳು ಮಾನಸಾಂತರಪಡಲಿಲ್ಲ.

2:22b.REV.002.022 ಇಗೋ, ನಾನು ಅವಳನ್ನು ಹಾಸಿಗೆಯಲ್ಲಿಯೂ ಅವಳೊಂದಿಗೆ ವ್ಯಭಿಚಾರ ಮಾಡಿದವರು ತಮ್ಮ ಕೃತ್ಯಗಳಿ ಗಾಗಿ ಮಾನಸಾಂತರಪಡದಿದ್ದರೆ ಅವರನ್ನು ಮಹಾಸಂಕ ಟದಲ್ಲಿಯೂ ಹಾಕುವೆನು.

2:23b.REV.002.023 ಅವಳ ಮಕ್ಕಳನ್ನು ಕೊಂದೇಕೊಲ್ಲುವೆನು; ಆಗ ನಾನು ಅಂತರಿಂದ್ರಿಯಗ ಳನ್ನೂ ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆ ಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು; ನಿಮ್ಮಲ್ಲಿ ಪ್ರತಿಯೊಬ್ಬನಿಗೆ ನಿಮ್ಮ ಕೃತ್ಯಗಳ ಪ್ರಕಾರ ಕೊಡುವೆನು.

2:24b.REV.002.024 ಆದರೆ ನಿಮಗೂ ಥುವತೈರದಲ್ಲಿರುವ ಮಿಕ್ಕಾದವ ರಿಗೂ ನಾನು ಹೇಳುವದೇನಂದರೆ, ಅವರು ಹೇಳಿಕೊ ಳ್ಳುವಂಥ ಸೈತಾನನ ಅಗಾಧವಾದ ಬೋಧನೆಯು ಯಾರಾರಲ್ಲಿ ಇರುವದಿಲ್ಲವೋ ಯಾರು ಅದನ್ನು ಅರಿ ಯದೆ ಇದ್ದಾರೋ ಅವರ ಮೇಲೆ ನಾನು ಬೇರೆ ಯಾವ ಭಾರವನ್ನೂ ಹಾಕುವದಿಲ್ಲ.

2:25b.REV.002.025 ಆದರೆ ಈಗ ನಿಮಗಿರು ವದನ್ನು ನಾನು ಬರುವ ತನಕ ಬಿಗಿಯಾಗಿ ಹಿಡಿದು ಕೊಂಡಿರ್ರಿ.

2:26b.REV.002.026 ಯಾವನು ಜಯಹೊಂದಿ ನನ್ನ ಕ್ರಿಯೆಗಳನ್ನು ಕಡೇವರೆಗೂ ಕೈಕೊಳ್ಳುತ್ತಾನೋ ಅವನಿಗೆ ನಾನು ಜನಾಂಗಗಳ ಮೇಲೆ ಅಧಿಕಾರವನ್ನು ಕೊಡು ತ್ತೇನೆ.

2:27b.REV.002.027 ನಾನು ನನ್ನ ತಂದೆಯಿಂದ ಹೊಂದಿದ ಪ್ರಕಾ ರವೇ ಅವನು ಜನಾಂಗಗಳನ್ನು ಕಬ್ಬಿಣದ ಕೋಲಿನಿಂದ ಆಳುವನು; ಅವರು ಕುಂಬಾರನ ಮಡಿಕೆಗಳಂತೆ ಒಡೆದು ಚೂರಾಗುವರು.

2:28b.REV.002.028 ನಾನು ಅವನಿಗೆ ಉದಯನಕ್ಷತ್ರ ವನ್ನು ಕೊಡುವೆನು.ಆತ್ಮನು ಸಭೆಗಳಿಗೆ ಹೇಳುವ ದನ್ನು ಕಿವಿಯುಳ್ಳವನು ಕೇಳಲಿ.

2:29b.REV.002.029 ಆತ್ಮನು ಸಭೆಗಳಿಗೆ ಹೇಳುವ ದನ್ನು ಕಿವಿಯುಳ್ಳವನು ಕೇಳಲಿ.

3

3:1b.REV.003.001 ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ : ದೇವರ ಏಳು ಆತ್ಮಗಳೂ ಏಳೂ ನಕ್ಷತ್ರಗಳೂ ಉಳ್ಳಾತನು ಹೇಳುವಂಥವುಗಳೇನಂದರೆ, ನಿನ್ನ ಕ್ರಿಯೆಗಳನ್ನು ಅಂದರೆ ಜೀವಿಸುವವನು ಎಂದು ಹೆಸರು ನಿನಗಿದ್ದರೂ ಸತ್ತವನಾಗಿದ್ದೀ ಎಂದು ನಾನು ಬಲ್ಲೆನು.

3:2b.REV.003.002 ಎಚ್ಚರವಾಗಿರು, ಸಾಯುವದಕ್ಕೆ ಸಿದ್ಧವಾಗಿ ರುವ ಉಳಿದವುಗಳನ್ನು ಬಲಪಡಿಸು. ಯಾಕಂದರೆ ದೇವರ ಮುಂದೆ ನಿನ್ನ ಕ್ರಿಯೆಗಳು ಸಂಪೂರ್ಣವಾದ ವುಗಳೆಂದು ನಾನು ಕಾಣಲಿಲ್ಲ.

3:3b.REV.003.003 ಆದದರಿಂದ ನೀನು ಹೊಂದಿದ್ದನ್ನೂ ಕೇಳಿದ್ದನ್ನೂ ನೆನಪಿಗೆ ತಂದುಕೊಂಡು ಅದನ್ನು ಬಿಗಿಯಾಗಿ ಹಿಡಿದುಕೋ, ಮಾನಸಾಂತರ ಪಡು. ನೀನು ಎಚ್ಚರವಾಗಿಲ್ಲದಿದ್ದರೆ ಕಳ್ಳನು ಬರುವಂತೆ ನಾನು ನಿನ್ನ ಮೇಲೆ ಬರುವೆನು; ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಅದು ನಿನಗೆ ತಿಳಿಯದು.

3:4b.REV.003.004 ತಮ್ಮ ವಸ್ತ್ರಗಳನ್ನು ಮಲಿನಮಾಡಿ ಕೊಳ್ಳದಿರುವ ಕೆಲವರು ಸಾರ್ದಿಸಿನಲ್ಲಿ ಸಹ ನಿನ್ನಲ್ಲಿ ದ್ದಾರೆ. ಅವರು ಬಿಳೀ ವಸ್ತ್ರಗಳನ್ನು ಧರಿಸಿಕೊಂಡು ನನ್ನೊಂದಿಗೆ ನಡೆಯುವರು. ಯಾಕಂದರೆ ಅವರು ಯೋಗ್ಯರಾಗಿದ್ದಾರೆ.

3:5b.REV.003.005 ಜಯಹೊಂದುವ ಇವನೇ ಬಿಳೀ ವಸ್ತ್ರದಿಂದ ಹೊದಿಸಲ್ಪಡುವನು; ಜೀವದ ಪುಸ್ತಕದಿಂದ ನಾನು ಅವನ ಹೆಸರನ್ನು ಅಳಿಸಿ ಬಿಡುವದೇ ಇಲ್ಲ, ಆದರೆ ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಅವನ ಹೆಸರನ್ನು ಒಪ್ಪಿಕೊಳ್ಳುವೆನು.

3:6b.REV.003.006 ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.

3:7b.REV.003.007 ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ: ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯು ವಾತನೂ ಯಾರು ತೆರೆಯದಂತೆ ಮುಚ್ಚುವಾತನೂ ಆಗಿರುವವನು ಹೇಳುವಂಥವುಗಳೇನಂದರೆ,

3:8b.REV.003.008 ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು; ಇಗೋ, ನಾನು ನಿನ್ನ ಮುಂದೆ ಒಂದು ಬಾಗಲನ್ನು ತೆರೆದಿದ್ದೇನೆ, ಅದನ್ನು ಯಾವ ಮನುಷ್ಯನೂ ಮುಚ್ಚಲಾರನು; ಯಾಕಂದರೆ ನಿನ್ನ ಶಕ್ತಿ ಕೊಂಚವಾಗಿದ್ದರೂ ನನ್ನ ವಾಕ್ಯವನ್ನು ಕಾಪಾಡಿ ನನ್ನ ಹೆಸರನ್ನು ಅಲ್ಲಗಳೆಯಲಿಲ್ಲ.

3:9b.REV.003.009 ಇಗೋ, ಯೆಹೂದ್ಯ ರಲ್ಲದವರಾಗಿದ್ದರೂ ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದವರನ್ನು ಬರಮಾಡಿ, ಇಗೋ, ಅವರನ್ನು ನಿನ್ನ ಪಾದಗಳ ಮುಂದೆ ಆರಾಧಿಸುವಂತೆ ಮಾಡುವೆನು, ಇದರಿಂದ ನಾನು ನಿನ್ನನ್ನು ಪ್ರೀತಿಸಿದ್ದೇನೆಂದು ಅವರು ತಿಳುಕೊಳ್ಳುವಂತೆ ಮಾಡು

3:10b.REV.003.010 ನೀನು ನನ್ನ ಸಹನ ವಾಕ್ಯವನ್ನು ಕಾಪಾಡಿದ್ದರಿಂದ ಭೂಮಿಯ ಮೇಲೆ ವಾಸ ಮಾಡುವವ ರನ್ನು ಪರೀಕ್ಷಿಸುವದಕ್ಕಾಗಿ ಲೋಕದ ಮೇಲೆಲ್ಲಾ ಬರು ವದಕ್ಕಿರುವ ಶೋಧನೆಯ ಸಮಯದಿಂದ ನಾನು ಸಹ ನಿನ್ನನ್ನು ಕಾಪಾಡುವೆನು.

3:11b.REV.003.011 ಇಗೋ, ನಾನು ಬೇಗನೆ ಬರುತ್ತೇನೆ; ನಿನ್ನ ಕಿರೀಟವನ್ನು ಯಾರೂ ಅಪಹರಿಸ ದಂತೆ ನಿನಗಿರುವದನ್ನು ಬಿಗಿಯಾಗಿ ಹಿಡಿದುಕೊಂಡಿರು;

3:12b.REV.003.012 ಯಾವನು ಜಯ ಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ಮಾಡುವೆನು; ಅವನು ಇನ್ನು ಮುಂದೆ ಅದರೊಳಗಿಂದ ಹೊರಗೆ ಹೋಗುವದೇ ಇಲ್ಲ. ಇದಲ್ಲದೆ ನನ್ನ ದೇವರ ಹೆಸರನ್ನೂ ಪರಲೋಕದಲ್ಲಿರುವ ನನ್ನ ದೇವರ ಬಳಿಯಿಂದ ಇಳಿದು ಬರುವ ಹೊಸ ಯೆರೂಸಲೇಮ್‌ ಎಂಬ

3:13b.REV.003.013 ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.

3:14b.REV.003.014 ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ: ಆಮೆನ್‌ ಎಂಬಾತನು ಮತ್ತು ನಂಬಿಗಸ್ತನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಯ ಆದಿಯೂ ಆಗಿರುವಾತನು ಹೇಳುವವುಗಳು ಯಾವವೆಂದರೆ,

3:15b.REV.003.015 ನೀನು ತಣ್ಣಗೂ ಬೆಚ್ಚಗೂ ಅಲ್ಲದಿರುವ ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು; ನೀನು ತಣ್ಣಗಾಗಲಿ ಬೆಚ್ಚಗಾಗಲಿ ಇರಬೇಕೆಂಬದು ನನ್ನ ಇಷ್ಟವಾಗಿತ್ತು.

3:16b.REV.003.016 ಆದರೆ ನೀನು ತಣ್ಣಗಾಗಲಿ ಇಲ್ಲವೆ ಬೆಚ್ಚಗಾಗಲಿ ಇಲ್ಲದೆ ಉಗುರು ಬೆಚ್ಚಗಿರುವದರಿಂದ ನಿನ್ನನ್ನು ನಾನು ನನ್ನ ಬಾಯೊಳಗಿಂದ ಕಾರುವೆನು.

3:17b.REV.003.017 ನೀನು--ನಾನು ಐಶ್ವರ್ಯವಂತನು, ಧನವೃದ್ಧಿಯುಳ್ಳವನು, ಯಾವದರ ಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ; ಆದರೆ ನೀನು ಕೇವಲ ನಿರ್ಗತಿಕನು, ದರಿದ್ರನು, ಬಡವನು, ಕುರುಡನು, ಬೆತ್ತಲೆಯಾದವನು ಆಗಿರುವ ದನ್ನು ತಿಳಿಯದೆ ಇದ್ದೀ.

3:18b.REV.003.018 ನೀನು ಐಶ್ವರ್ಯವಂತ ನಾಗುವ ಹಾಗೆ ಬೆಂಕಿಯಲ್ಲಿ ಶೋಧಿಸಿದ ಚಿನ್ನವನ್ನೂ ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಹೊದ್ದು ಕೊಳ್ಳುವದಕ್ಕಾಗಿ ಬಿಳೀ ವಸ್ತ್ರವನ್ನೂ ಕಣ್ಣು ಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಿನಗೆ ಬುದ್ಧಿ ಹೇಳುತ್ತೇ

3:19b.REV.003.019 ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ; ಆದದರಿಂದ ನೀನು ಆಸಕ್ತನಾಗಿರು; ಮಾನಸಾಂತರಪಡು.

3:20b.REV.003.020 ಇಗೋ, ನಾನು ಬಾಗಿಲ ಬಳಿಯಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ; ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು, ಅವನು ನನ್ನ ಸಂಗಡ ಊಟ ಮಾಡುವನು.

3:21b.REV.003.021 ನಾನು ಜಯಹೊಂದಿ ನನ್ನ ತಂದೆಯೊಡನೆ ಆತನ ಸಿಂಹಾಸನದಲ್ಲಿ ಕೂತುಕೊಂಡ ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ನನ್ನ ಸಿಂಹಾಸನದಲ್ಲಿ ನನ್ನ ಕೂಡ ಕೂತುಕೊಳ್ಳುವಂತೆ ಅನು ಗ್ರಹಿಸುವೆನು.ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.

3:22b.REV.003.022 ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.

4

4:1b.REV.004.001 ಇದಾದ ಮೇಲೆ ನಾನು ನೋಡಿದಾಗ ಇಗೋ, ಪರಲೋಕದಲ್ಲಿ ತೆರೆದಿದ್ದ ಬಾಗಿಲು ಕಾಣಿಸಿತು; ನನ್ನ ಸಂಗಡ ತುತೂರಿಯು ಮಾತನಾಡುತ್ತದೊ ಎಂಬಂತೆ ನಾನು ಮೊದಲು ಕೇಳಿದ್ದ ಧ್ವನಿಯು ನನಗೆ ಕೇಳಿಸಿತು; ಅದು--ಇಲ್ಲಿಗೆ ಮೇಲಕ್ಕೇರಿ ಬಾ, ಮುಂದೆ ಆಗತಕ್ಕವುಗಳನ್ನು ನಾನು ನಿನಗೆ ತೋರಿ ಸ

4:2b.REV.004.002 ಕೂಡಲೆ ನಾನು ಆತ್ಮವಶ ನಾದೆನು; ಆಗ ಇಗೋ, ಪರಲೋಕದಲ್ಲಿ ಒಂದು ಸಿಂಹಾಸನವಿತ್ತು; ಸಿಂಹಾಸನದ ಮೇಲೆ ಒಬ್ಬಾತನು ಕೂತಿದ್ದನು.

4:3b.REV.004.003 ಕೂತಿದ್ದಾತನು ಸೂರ್ಯಕಾಂತ ಪದ್ಮರಾಗ ಕಲ್ಲುಗಳಂತೆ ಕಾಣುತ್ತಿದ್ದನು; ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ ಮಳೆ ಬಿಲ್ಲು ಇತ್ತು.

4:4b.REV.004.004 ಇದಲ್ಲದೆ ಸಿಂಹಾಸನದ ಸುತ್ತಲೂ ಇಪ್ಪತ್ತನಾಲ್ಕು ಆಸನಗಳಿದ್ದವು; ಆ ಆಸನಗಳ ಮೇಲೆ ಬಿಳೀ ವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ತು ನಾಲ್ಕು ಮಂದಿ ಹಿರಿಯರು ಕೂತಿದ್ದರು; ಅವರ ತಲೆಗಳ ಮೇಲೆ ಚಿನ್ನದ ಕಿರೀಟ ಗಳಿದ್ದವು.

4:5b.REV.004.005 ಸಿಂಹಾಸನದೊಳಗಿಂದ ಮಿಂಚುಗಳೂ ಗುಡುಗುಗಳೂ ಶಬ್ದಗಳೂ ಹೊರಟವು; ಅದರ ಮುಂದೆ ದೇವರ ಏಳು ಆತ್ಮಗಳಾಗಿರುವ ಏಳು ಬೆಂಕಿಯ ದೀಪಗಳು ಉರಿಯುತ್ತಿದ್ದವು.

4:6b.REV.004.006 ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ ಗಾಜಿನ ಸಮುದ್ರವಿದ್ದ ಹಾಗೆ ಇತ್ತು. ಸಿಂಹಾಸನದ ಮಧ್ಯದಲ್ಲಿ ಮತ್ತು ಅದರ ಸುತ್ತಲೂ ನಾಲ್ಕು ಜೀವಿಗಳಿದ್ದವು; ಅವುಗಳಿಗೆ ಹಿಂದೆ ಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು.

4:7b.REV.004.007 ಮೊದಲನೆಯ ಜೀವಿಯು, ಸಿಂಹದಂತಿತ್ತು, ಎರಡ ನೆಯ ಜೀವಿಯು ಹೋರಿಯಂತಿತ್ತು; ಮೂರನೆಯ ಜೀವಿಯ ಮುಖವು ಮನುಷ್ಯರ ಮುಖದಂತಿತ್ತು; ನಾಲ್ಕನೆಯ ಜೀವಿಯು ಹಾರುವ ಗರುಡ ಪಕ್ಷಿಯಂತಿತ್ತು.

4:8b.REV.004.008 ಆ ನಾಲ್ಕು ಜೀವಿಗಳೊಳಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು; ಅವುಗಳಿಗೆ ತುಂಬಾ ಕಣ್ಣುಗಳಿದ್ದವು; ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ-- ಇದ್ದಾತನು ಇರುವಾತನೂ ಬರುವಾತನೂ ಸರ್ವಶಕ್ತ ನಾಗಿರುವ ದೇವರಾದ ಕರ್ತನು ಪರಿಶುದ್ಧನು ಪರಿ ಶುದ್ಧನು ಪರಿಶುದ್ಧನು ಎಂದು ಹೇ

4:9b.REV.004.009 ಯುಗ ಯುಗಾಂತರಗಳಲ್ಲಿಯೂ ಜೀವಿಸುವಾತನಾಗಿ ಸಿಂಹಾ ಸನದ ಮೇಲೆ ಕೂತಿರುವಾತನಿಗೆ ಆ ಜೀವಿಗಳು ಪ್ರಭಾವಮಾನ ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದವು.

4:10b.REV.004.010 ಆಗ ಆ ಇಪ್ಪತ್ತನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕೂತಿದ್ದಾತನ ಮುಂದೆ ಅಡ್ಡಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ ಯುಗಯುಗಾಂತರ ಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಾ--ಓ ಕರ್ತನೇ, ನೀನು ಪ್ರಭಾವ ಮಾನಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಯಾಕಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಅವು ನಿನ್ನ ಚಿತ್ತ ದಂತೆ ಉಂಟಾಗಿ ಸೃಷ್ಟಿಸಲ್ಪಟ್ಟವು ಎಂದು ಹೇಳುವರು.

4:11b.REV.004.011 ಓ ಕರ್ತನೇ, ನೀನು ಪ್ರಭಾವ ಮಾನಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಯಾಕಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಅವು ನಿನ್ನ ಚಿತ್ತ ದಂತೆ ಉಂಟಾಗಿ ಸೃಷ್ಟಿಸಲ್ಪಟ್ಟವು ಎಂದು ಹೇಳುವರು.

5

5:1b.REV.005.001 ಸಿಂಹಾಸನದ ಮೇಲೆ ಕೂತಿದ್ದಾತನ ಬಲಗೈಯಲ್ಲಿ ಒಂದು ಪುಸ್ತಕವನ್ನು ಕಂಡೆನು; ಅದರ ಒಳಗೂ ಹಿಂದಿನ ಭಾಗದ ಮೇಲೆಯೂ ಬರೆದಿತ್ತು; ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.

5:2b.REV.005.002 ಇದಲ್ಲದೆ ಬಲಿಷ್ಠನಾದ ಒಬ್ಬ ದೂತನು--ಈ ಪುಸ್ತಕವನ್ನು ತೆರೆಯುವದಕ್ಕೂ ಇದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯಾವನು ಯೋಗ್ಯನು ಎಂದು ಮಹಾಶಬ್ದದಿಂದ ಸಾರುವದನ್ನು ಕಂಡೆನು.

5:3b.REV.005.003 ಆ ಪುಸ್ತಕವನ್ನು ತೆರೆಯುವದಕ್ಕಾದರೂ ಅದರೊಳಗೆ ನೋಡುವದಕ್ಕಾದರೂ ಪರಲೋಕದಲ್ಲಿಯಾಗಲಿ ಭೂಮಿಯಲ್ಲಿಯಾಗಲಿ ಭೂಮಿಯ ಕೆಳಗಾಗಲಿ ಯಾವನಿಗೂ ಶಕ್ತಿಯಿರಲಿಲ್ಲ.

5:4b.REV.005.004 ಆಗ ಪುಸ್ತಕವನ್ನು ತೆರೆಯುವದಕ್ಕಾಗಲಿ ಅದನ್ನು ಓದುವದಕ್ಕಾಗಲಿ ಅದರಲ್ಲಿ ನೋಡುವದಕ್ಕಾಗಲಿ ಯೋಗ್ಯನಾದವನು ಒಬ್ಬನೂ ಸಿಕ್ಕಲಿಲ್ಲವಾದ ಕಾರಣ ನಾನು ಬಹಳವಾಗಿ ಅತ್ತೆನು.

5:5b.REV.005.005 ಆಗ ಹಿರಿಯರಲ್ಲಿ ಒಬ್ಬನು ನನಗೆ--ಅಳಬೇಡ; ಅಗೋ, ಯೂದಾ ಗೋತ್ರದ ಸಿಂಹವೂ ದಾವೀದನ ಅಂಕುರದವನೂ ಆಗಿರುವಾತನು ಆ ಪುಸ್ತಕವನ್ನು ತೆರೆಯುವದಕ್ಕೂ ಅದರ ಏಳು ಮುದ್ರೆ ಗಳನ್ನು ಬಿಚ್ಚುವದಕ್ಕೂ ಜಯಹೊಂದಿದ್ದಾನೆ ಎಂದು ಹೇಳಿದನು.

5:6b.REV.005.006 ನಾನು ನೋಡಲಾಗಿ ಇಗೋ, ಸಿಂಹಾಸ ನದ ಮತ್ತು ನಾಲ್ಕು ಜೀವಿಗಳ ಮಧ್ಯದಲ್ಲಿಯೂ ಹಿರಿಯರ ಮಧ್ಯದಲ್ಲಿಯೂ ಒಂದು ಕುರಿಮರಿಯು ವಧಿಸಲ್ಪಟ್ಟಂತೆ ನಿಂತಿರುವದನ್ನು ಕಂಡೆನು; ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು; ಅವು ಭೂಮಿಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮ

5:7b.REV.005.007 ಆತನು ಬಂದು ಸಿಂಹಾಸನದ ಮೇಲೆ ಕೂತಿದ್ದಾತನ ಬಲಗೈಯೊಳಗಿಂದ ಆ ಪುಸ್ತಕ ವನ್ನು ತೆಗೆದುಕೊಂಡನು.

5:8b.REV.005.008 ಆತನು ಆ ಪುಸ್ತಕವನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಮುಂದೆ ಅಡ್ಡಬಿದ್ದರು; ಅವರೆಲ್ಲರ ಕೈಗಳಲ್ಲಿ ವೀಣೆಗಳೂ ಪರಿ ಶುದ್ಧರ ಪರಿಮಳವಾದ ಪ್ರಾರ್ಥನೆಗಳಿಂದ ತುಂಬಿದ್ದ ಚಿನ್ನದ ಪಾತ್ರೆಗಳೂ ಇದ್ದವು.

5:9b.REV.005.009 ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;

5:10b.REV.005.010 ನಮ್ಮನ್ನು ನಮ್ಮ ದೇವರಿಗೊಸ್ಕರ ರಾಜರನ್ನಾಗಿಯೂ ಯಾಜಕರನ್ನಾ ಗಿಯೂ ಮಾಡಿದ್ದೀ; ನಾವು ಭೂಮಿಯ ಮೇಲೆ ಆಳುವೆವು ಎಂದು ಹೇಳಿದರು.

5:11b.REV.005.011 ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಮತ್ತು ಹಿರಿಯರ ಸುತ್ತಲು ಬಹುಮಂದಿ ದೂತರ ಶಬ್ದವನ್ನು ಕೇಳಿದೆನು; ಅವರ ಸಂಖ್ಯೆಯು ಕೋಟ್ಯಾನುಕೋಟಿ ಯಾಗಿಯೂ ಲಕ್ಷೋಪಲಕ್ಷವಾಗಿಯೂ ಇತ್ತು.

5:12b.REV.005.012 ಅವರು--ವಧಿತನಾದ ಕುರಿಮರಿಯು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಮಹಾಶಬ್ದದಿಂದ ಹೇಳಿದರು.

5:13b.REV.005.013 ಇದಲ್ಲದೆ ಆಕಾಶ ದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗೂ ಸಮುದ್ರದಲ್ಲಿಯೂ ಅವುಗಳಲ್ಲಿರುವ ಎಲ್ಲಾ ಸೃಷ್ಟಿಗಳೂ--ಸಿಂಹಾಸನಾಸೀನನಾಗಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರಮಾನ ಪ್ರಭಾವ ಬಲವು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ನಾನು ಕೇಳಿದೆನು.ಆಗ ನಾಲ್ಕು ಜೀವಿಗಳು--ಆಮೆನ್‌ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.

5:14b.REV.005.014 ಆಗ ನಾಲ್ಕು ಜೀವಿಗಳು--ಆಮೆನ್‌ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.

6

6:1b.REV.006.001 ುರಿಮರಿಯಾದಾತನು ಆ ಮುದ್ರೆಗಳಲ್ಲಿ ಒಂದನ್ನು ತೆರೆದದ್ದನ್ನು ನಾನು ನೋಡಿ ದಾಗ ಆ ನಾಲ್ಕು ಜೀವಿಗಳಲ್ಲಿ ಒಂದು--ಬಂದು ನೋಡು ಎಂದು ಗುಡುಗಿನಂತಿದ್ದ ಒಂದು ಶಬ್ದವನ್ನು ಕೇಳಿದೆನು.

6:2b.REV.006.002 ಆಗ ಇಗೋ, ಒಂದು ಬಿಳೀ ಕುದುರೆ ಯನ್ನು ನಾನು ನೋಡಿದೆನು; ಅದರ ಮೇಲೆ ಕೂತಿದ್ದವನ ಕೈಯಲ್ಲಿ ಒಂದು ಬಿಲ್ಲು ಇತ್ತು; ಅವನಿಗೆ ಕಿರೀಟ ಕೊಡಲ್ಪಟ್ಟಿತ್ತು; ಅವನು ಜಯಿಸುತ್ತಿರುವವನಾಗಿ ಜಯಿಸುವದಕ್ಕೋಸ್ಕರ ಹೊರಟನು.

6:3b.REV.006.003 ಆತನು ಎರಡನೆಯ ಮುದ್ರೆಯನ್ನು ತೆರೆದಾಗ ಎರಡನೆಯ ಜೀವಿಯು--ಬಂದು ನೋಡು ಅನ್ನುವ ದನ್ನು ಕೇಳಿದೆನು.

6:4b.REV.006.004 ಆಗ ಮತ್ತೊಂದು ಕೆಂಪು ಕುದುರೆಯು ಹೊರಗೆ ಹೋಯಿತು; ಅದರ ಮೇಲೆ ಕೂತಿದ್ದವನಿಗೆ ಭೂಮಿಯಿಂದ ಸಮಾಧಾನವನ್ನು ತೆಗೆದುಬಿಡುವ ದಕ್ಕೂ ಮನುಷ್ಯರು ಒಬ್ಬರನ್ನೊಬ್ಬರು ಕೊಲ್ಲುವವರಾಗು ವಂತೆ ಮಾಡುವದಕ್ಕೂ ಅಧಿಕಾರವು ಕೊಡಲ್ಪಟ್ಟಿತು; ಇದಲ್ಲದೆ ಅವನಿಗೆ ದೊಡ್ಡ ಕತ್ತಿಯು ಕೊ

6:5b.REV.006.005 ಆತನು ಮೂರನೆಯ ಮುದ್ರೆಯನ್ನು ತೆರೆದಾಗ ಮೂರನೆಯ ಜೀವಿಯು--ಬಂದು ನೋಡು ಅನ್ನು ವದನ್ನು ನಾನು ಕೇಳಿದೆನು. ಆಗ ಇಗೋ, ನಾನು ಕಪ್ಪು ಕುದುರೆಯನ್ನು ನೋಡಿದೆನು. ಅದರ ಮೇಲೆ ಕೂತಿದ್ದವನ ಕೈಯಲ್ಲಿ ತ್ರಾಸು ಇತ್ತು.

6:6b.REV.006.006 ಆಮೇಲೆ ನಾಲ್ಕು ಜೀವಿಗಳ ಮಧ್ಯದಿಂದ--ರೂಪಾಯಿಗೆ ಒಂದು ಸೇರು ಗೋಧಿ; ರೂಪಾಯಿಗೆ ಮೂರು ಸೇರು ಜವೆಗೋಧಿ; ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ನೀನು ಕೆಡಿಸಬೇಡ ಎಂದು ಹೇಳುವ ಧ್ವನಿಯನ್ನು ನಾನು ಕೇಳಿದೆನು.

6:7b.REV.006.007 ಆತನು ನಾಲ್ಕನೆಯ ಮುದ್ರೆಯನ್ನು ತೆರೆ ದಾಗ--ಬಂದು ನೋಡು ಎಂದು ನಾಲ್ಕನೆಯ ಜೀವಿಯು ಹೇಳುವ ಧ್ವನಿಯನ್ನು ನಾನು ಕೇಳಿದೆನು.

6:8b.REV.006.008 ನಾನು ನೋಡಲಾಗಿ ಒಂದು ಬೂದಿ ಬಣ್ಣದ ಕುದುರೆ ಯನ್ನು ಕಂಡೆನು. ಅದರ ಮೇಲೆ ಕೂತಿದ್ದವನ ಹೆಸರು ಮೃತ್ಯುವು; ನರಕವು ಅವನನ್ನು ಹಿಂಬಾಲಿಸಿತು. ಅವ ರಿಗೆ ಭೂಮಿಯ ಕಾಲುಭಾಗದ ಮೇಲೆ ಕತ್ತಿಯಿಂದಲೂ ಹಸಿವೆಯಿಂದಲೂ ಸಾವಿನಿಂದಲೂ ಭೂಮಿಯ ಮೃಗ ಗಳಿಂದಲೂ ಕೊಲ್ಲುವದಕ್ಕೆ ಅಧಿಕಾರವು ಕೊ

6:9b.REV.006.009 ಆತನು ಐದನೆಯ ಮುದ್ರೆಯನ್ನು ತೆರೆದಾಗ ದೇವರವಾಕ್ಯದ ನಿಮಿತ್ತವಾಗಿಯೂ ತಾವು ಹೊಂದಿದ್ದ ಸಾಕ್ಷಿಯ ನಿಮಿತ್ತವಾಗಿಯೂ ಹತವಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವದನ್ನು ನಾನು ಕಂಡೆನು.

6:10b.REV.006.010 ಅವರು--ಓ ಕರ್ತನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂಮಿಯ ಮೇಲೆ ವಾಸಿಸುವವರು ನಮ್ಮ ರಕ್ತವನ್ನು ಸುರಿಸಿದ್ದಕ್ಕಾಗಿ ನೀನು ಎಷ್ಟು ಕಾಲದವರೆಗೆ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದರು.

6:11b.REV.006.011 ಅವರಲ್ಲಿ ಒಬ್ಬೊಬ್ಬನಿಗೆ ಬಿಳೀ ನಿಲುವಂಗಿಗಳು ಕೊಡಲ್ಪಟ್ಟಿದ್ದವು. ಇದಲ್ಲದೆ ಅವರ ಹಾಗೆ ಅವರ ಜೊತೆ ಸೇವಕರ ಮತ್ತು ಅವರ ಸಹೋದರರ ಕೊಲೆಯು ಪೂರೈಸುವ ತನಕ ಇನೂ ಸ್ವಲ್ಪ ಕಾಲ ವಿಶ್ರಮಿಸಿಕೊಂಡಿರಬೇಕೆಂದು ಅವರಿಗೆ ಹೇಳಲ್ಪಟ್ಟಿತು.

6:12b.REV.006.012 ಆತನು ಆರನೆಯ ಮುದ್ರೆ ತೆರೆಯುವದನ್ನು ನಾನು ಕಂಡೆನು. ಆಗ ಇಗೋ, ಮಹಾಭೂಕಂಪ ಉಂಟಾಯಿತು; ಸೂರ್ಯನು ಕೂದಲಿನ ಗೋಣಿ ಯಂತೆ ಕಪ್ಪಾದನು. ಚಂದ್ರನು ರಕ್ತದಂತಾದನು.

6:13b.REV.006.013 ಅಂಜೂರದ ಮರವು ಬಿರುಗಾಳಿಯಿಂದ ಅಲ್ಲಾಡಿಸ ಲ್ಪಟ್ಟು ಅಕಾಲದಲ್ಲಿ ತನ್ನ ಕಾಯಿಗಳನ್ನು ಉದುರಿಸುವ ಪ್ರಕಾರ ಆಕಾಶದ ನಕ್ಷತ್ರಗಳು ಭೂಮಿಗೆ ಬಿದ್ದವು.

6:14b.REV.006.014 ಆಕಾಶವು ಸುರುಳಿಯ ಹಾಗೆ ಸುತ್ತಲ್ಪಟ್ಟು ಹೋಗಿ ಬಿಟ್ಟಿತು; ಎಲ್ಲಾ ಬೆಟ್ಟಗಳೂ ದ್ವೀಪಗಳೂ ತಮ್ಮ ತಮ್ಮ ಸ್ಥಳಗಳಿಂದ ಚದರಿದವು.

6:15b.REV.006.015 ಭೂರಾಜರೂ ದೊಡ್ಡ ವರೂ ಐಶ್ವರ್ಯವಂತರೂ ಮುಖ್ಯಾಧಿಪತಿಗಳೂ ಪರಾ ಕ್ರಮಶಾಲಿಗಳೂ ಎಲ್ಲಾ ದಾಸರೂ ಸ್ವತಂತ್ರರೂ ಗವಿ ಗಳಲ್ಲಿಯೂ ಬೆಟ್ಟಗಳ ಬಂಡೆಗಳಲ್ಲಿಯೂ ಅಡಗಿ ಕೊಂಡು

6:16b.REV.006.016 ಪರ್ವತಗಳಿಗೂ ಬಂಡೆಗಳಿಗೂ--ನಮ್ಮ ಮೇಲೆ ಬೀಳಿರಿ, ಸಿಂಹಾಸನದ ಮೇಲೆ ಕೂತಿದ್ದಾತನ ಮುಖಕ್ಕೂ ಕುರಿಮರಿಯಾದಾತನ ಕೋಪಕ್ಕೂ ನಮ್ಮನ್ನು ಮರೆಮಾಡಿರಿ;ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.

6:17b.REV.006.017 ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.

7

7:1b.REV.007.001 ಇವುಗಳಾದ ಮೇಲೆ ನಾಲ್ಕು ಮಂದಿ ದೂತರು ಭೂಮಿಯ ನಾಲ್ಕು ಮೂಲೆ ಗಳಲ್ಲಿ ನಿಂತುಕೊಂಡು ಭೂಮಿಯ ಮೇಲಾಗಲಿ ಸಮುದ್ರದ ಮೇಲಾಗಲಿ ಯಾವ ಮರದ ಮೇಲಾಗಲಿ ಗಾಳಿ ಬೀಸದಂತೆ ಭೂಮಿಯ ನಾಲ್ಕು ದಿಕ್ಕಿನ ಗಾಳಿ ಗಳನ್ನು ಹಿಡಿದಿರುವದನ್ನು ನಾನು ಕಂಡೆನು.

7:2b.REV.007.002 ಇದಲ್ಲದೆ ಮತ್ತೊಬ್ಬ ದೂತನು ಜೀವವುಳ್ಳ ದೇವರ ಮುದ್ರೆಯನ್ನು ಹಿಡಿದುಕೊಂಡು ಮೂಡಲದಿಂದ ಏರಿ ಬರುವದನ್ನು ಕಂಡೆನು. ಅವನು ಭೂಮಿಯನ್ನೂ ಸಮುದ್ರವನ್ನೂ ಕೆಡಿಸುವ ಅಧಿಕಾರ ಹೊಂದಿದ ಆ ನಾಲ್ಕು ಮಂದಿ ದೂತರಿಗೆ--

7:3b.REV.007.003 ನಾವು ನಮ್ಮ ದೇವರ ಸೇವಕರ ಹಣೆಗಳಲ್ಲಿ ಮುದ್ರಿಸುವ ತನಕ ಭೂಮಿಯನ್ನಾಗಲಿ ಸಮುದ್ರವನ್ನಾಗಲಿ ಮರಗಳನ್ನಾಗಲಿ ಕೆಡಿಸಬೇಡಿರಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದನು.

7:4b.REV.007.004 ಮುದ್ರೆ ಹೊಂದಿದವರ ಸಂಖ್ಯೆಯನ್ನು ನಾನು ಕೇಳಿದೆನು; ಇಸ್ರಾಯೇಲ್ಯನ ಮಕ್ಕಳ ಗೋತ್ರದವರಲ್ಲಿ ಮುದ್ರೆಯನ್ನು ಹೊಂದಿದವರು ಒಂದು ಲಕ್ಷ ನಾಲ್ವತ್ತು ನಾಲ್ಕು ಸಾವಿರ.

7:5b.REV.007.005 ಯೂದನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ರೂಬೇನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ಗಾದನ ಗೋತ್ರ ದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ.

7:6b.REV.007.006 ಅಷೇರನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆ ರಡು ಸಾವಿರ, ನೆಫ್ತಲೀಮನ ಗೋತ್ರದವರಲ್ಲಿ ಮುದ್ರಿಸ ಲ್ಪಟ್ಟವರು ಹನ್ನೆರಡು ಸಾವಿರ, ಮನಸ್ಸೆಯ ಗೋತ್ರದವ ರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ.

7:7b.REV.007.007 ಸಿಮೆ ಯೋನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆ ರಡು ಸಾವಿರ, ಲೇವಿಯ ಗೋತ್ರದವರಲ್ಲಿ ಮುದ್ರಿಸ ಲ್ಪಟ್ಟವರು ಹನ್ನೆರಡು ಸಾವಿರ, ಇಸ್ಸಾಕಾರನ ಗೋತ್ರ ದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ.

7:8b.REV.007.008 ಜೆಬುಲೂನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ಯೋಸೇಫನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ಬೆನ್ಯಾವಿಾನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡುಸಾವಿರ.

7:9b.REV.007.009 ಇದಾದ ಮೇಲೆ ಇಗೋ, ನಾನು ನೋಡಲಾಗಿ ಸಮಸ್ತ ಜನಾಂಗ ಕುಲ ಪ್ರಜೆ ಭಾಷೆಗಳೊಳಗಿಂದ ಯಾರೂ ಎಣಿಸಲಾಗದಂತ ಮಹಾ ಸಮೂಹವು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡವರಾಗಿ ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಸಿಂಹಾಸನದ ಮುಂದೆಯೂ ಕುರಿಮರಿಯಾದಾತನ ಮುಂದೆಯೂ

7:10b.REV.007.010 ಅವರು--ರಕ್ಷಣೆಯು ಸಿಂಹಾಸನದ ಮೇಲೆ ಕೂತಿರುವ ನಮ್ಮ ದೇವರಿಗೂ ಕುರಿಮರಿಯಾದಾತನಿಗೂ ಸೇರಿದ್ದು ಎಂದು ಮಹಾ ಶಬ್ದದಿಂದ ಕೂಗಿದರು.

7:11b.REV.007.011 ಸಿಂಹಾಸನದ, ಹಿರಿಯರ ಮತ್ತು ನಾಲ್ಕು ಜೀವಿಗಳ ಸುತ್ತಲೂ ನಿಂತುಕೊಂಡಿದ್ದ ದೂತರೆಲ್ಲರೂ ಸಿಂಹಾಸನದ ಮುಂದೆ ಬೋರಲ ಬಿದ್ದು ದೇವರನ್ನು ಆರಾಧಿಸುತ್ತಾ.--

7:12b.REV.007.012 ಆಮೆನ್‌. ನಮ್ಮ ದೇವರಿಗೆ ಸ್ತೋತ್ರವೂ ಪ್ರಭಾವವೂ ಜ್ಞಾನವೂ ಕೃತಜ್ಞತಾಸ್ತುತಿಯೂ ಮಾನವೂ ಬಲವೂ ಸಾಮ ರ್ಥ್ಯವೂ ಯುಗಯುಗಾಂತರಗಳಲ್ಲಿ ಇರಲಿ ಎಂದು ಹೇಳಿದರು. ಆಮೆನ್‌.

7:13b.REV.007.013 ಆಗ ಹಿರಿಯರಲ್ಲಿ ಒಬ್ಬನು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡಿರುವವರಾದ ಇವರು ಯಾರು? ಇವರು ಎಲ್ಲಿಂದ ಬಂದವರು ಎಂದು ನನ್ನನ್ನು ಕೇಳಿದನು.

7:14b.REV.007.014 ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ.

7:15b.REV.007.015 ಈ ಕಾರಣದಿಂದ ಇವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳು ಆತನ ಸೇವೆ ಮಾಡುವವರಾ ಗಿದ್ದಾರೆ; ಸಿಂಹಾಸನದ ಮೇಲೆ ಕೂತಿರುವಾತನು ಅವರ ಮಧ್ಯದಲ್ಲಿ ವಾಸಿಸುವನು.

7:16b.REV.007.016 ಇನ್ನು ಮೇಲೆ ಅವರಿಗೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಆಗುವದೇ ಇಲ್ಲ; ಇದಲ್ಲದೆ ಅವರಿಗೆ ಬಿಸಿಲಾದರೂ ಯಾವ ಝಳವಾದರೂ ಬಡಿಯುವದಿಲ್ಲ.ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.

7:17b.REV.007.017 ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.

8

8:1b.REV.008.001 ಆತನು ಏಳನೆಯ ಮುದ್ರೆಯನ್ನು ತೆರೆ ದಾಗ ಸುಮಾರು ಅರ್ಧಗಂಟೆ ಹೊತ್ತಿನವರೆಗೂ ಪರಲೋಕದಲ್ಲಿ ನಿಶ್ಯಬ್ದವಾಯಿತು.

8:2b.REV.008.002 ಆಗ ದೇವರ ಸನ್ನಿಧಿಯಲ್ಲಿ ನಿಂತಿರುವ ಏಳು ಮಂದಿ ದೂತರನ್ನು ಕಂಡೆನು; ಅವರಿಗೆ ಏಳು ತುತೂರಿಗಳು ಕೊಡಲ್ಪಟ್ಟಿದ್ದವು.

8:3b.REV.008.003 ಆಮೇಲೆ ಚಿನ್ನದ ಧೂಪದ ಪಾತ್ರೆಯಿದ್ದ ಮತ್ತೊಬ್ಬ ದೂತನು ಬಂದು ಯಜ್ಞವೇದಿಯ ಬಳಿ ಯಲ್ಲಿ ನಿಂತನು; ಸಿಂಹಾಸನದ ಮುಂದೆ ಇದ್ದ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಸಮರ್ಪಿಸುವದಕ್ಕಾಗಿ ಅವನಿಗೆ ಬಹಳ ಧೂಪ ಕೊಡಲ್ಪಟ್ಟಿತು.

8:4b.REV.008.004 ಆಗ ಧೂಪದ ಹೊಗೆಯು ದೂತನ ಕೈಯೊಳಗಿಂದ ಹೊರಟು ಪರಿಶುದ್ಧರ ಪ್ರಾರ್ಥನೆಗಳೊಂದಿಗೆ ಕೂಡಿ ದೇವರ ಸನ್ನಿಧಾನಕ್ಕೆ ಏರಿಹೋಯಿತು.

8:5b.REV.008.005 ತರುವಾಯ ಆ ದೇವದೂತನು ಧೂಪದ ಪಾತ್ರೆಯನ್ನು ತೆಗೆದುಕೊಂಡು ಯಜ್ಞವೇದಿಯ ಬೆಂಕಿಯಿಂದ ಅದನ್ನು ತುಂಬಿಸಿ ಭೂಮಿಗೆ ಬಿಸಾಡಿದನು. ಆಗ ವಾಣಿಗಳೂ ಗುಡುಗುಗಳೂ ಮಿಂಚುಗಳೂ ಭೂ ಕಂಪವೂ ಉಂಟಾದವು.

8:6b.REV.008.006 ಏಳು ತುತೂರಿಗಳಿದ್ದ ಏಳು ಮಂದಿ ದೂತರು ತುತೂರಿಗಳನ್ನೂದುವದಕ್ಕೆ ಸಿದ್ಧಮಾಡಿಕೊಂಡರು.

8:7b.REV.008.007 ಮೊದಲನೆಯ ದೂತನು ಊದಿದಾಗ ರಕ್ತದಲ್ಲಿ ಕಲಸಿದ್ದ ಆನೆಕಲ್ಲಿನ ಮಳೆಯೂ ಬೆಂಕಿಯೂ ಭೂಮಿಗೆ ಸುರಿಸಲ್ಪಟ್ಟವು; ಮರಗಳೊಳಗೆ ಮೂರರಲ್ಲಿ ಒಂದು ಭಾಗ ಸುಟ್ಟುಹೋಯಿತು; ಹಸುರು ಹುಲ್ಲೆಲ್ಲಾ ಸುಟ್ಟುಹೋಯಿತು.

8:8b.REV.008.008 ಎರಡನೆಯ ದೂತನು ಊದಿದಾಗ ಬೆಂಕಿಯಿಂದ ಉರಿಯುವ ದೊಡ್ಡ ಬೆಟ್ಟವೋ ಎಂಬಂತಿದ್ದದ್ದು ಸಮುದ್ರದಲ್ಲಿ ಹಾಕಲ್ಪಟ್ಟಿತು. ಆಗ ಸಮುದ್ರದ ಮೂರ ರಲ್ಲಿ ಒಂದು ಭಾಗ ರಕ್ತವಾಯಿತು;

8:9b.REV.008.009 ಸಮುದ್ರದಲ್ಲಿರುವ ಪ್ರಾಣವಿದ್ದ ಜೀವಿಗಳೊಳಗೆ ಮೂರರಲ್ಲಿ ಒಂದು ಭಾಗ ಸತ್ತುಹೋಯಿತು; ಹಡಗುಗಳೊಳಗೆ ಮೂರರಲ್ಲಿ ಒಂದು ಭಾಗ ನಾಶವಾಯಿತು.

8:10b.REV.008.010 ಮೂರನೆಯ ದೂತನು ಊದಿದಾಗ ದೀಪ ದಂತೆ ಉರಿಯುವ ಒಂದು ದೊಡ್ಡ ನಕ್ಷತ್ರವು ಆಕಾಶ ದಿಂದ ಬಿತ್ತು. ಅದು ನದಿಗಳೊಳಗೆ ಮೂರರಲ್ಲಿ ಒಂದು ಭಾಗದ ಮೇಲೆಯೂ ನೀರಿನ ಒರತೆಗಳ ಮೇಲೆಯೂ ಬಿತ್ತು.

8:11b.REV.008.011 ಆ ನಕ್ಷತ್ರಕ್ಕೆ ಮಾಚಿಪತ್ರೆ ಎಂದು ಹೆಸರು. ನೀರಿನಲ್ಲಿ ಮೂರರೊಳಗೆ ಒಂದು ಭಾಗ ಮಾಚಿಪತ್ರೆ ಯಾಯಿತು. ಆ ನೀರು ವಿಷವಾದದ್ದರಿಂದ ಮನುಷ್ಯರಲ್ಲಿ ಬಹಳ ಮಂದಿ ಸತ್ತರು.

8:12b.REV.008.012 ನಾಲ್ಕನೆಯ ದೂತನು ಊದಿದಾಗ ಸೂರ್ಯನ ಮೂರರಲ್ಲಿ ಒಂದು ಭಾಗವೂ ಚಂದ್ರನ ಮೂರರಲ್ಲಿ ಒಂದು ಭಾಗವೂ ನಕ್ಷತ್ರಗಳ ಮೂರರಲ್ಲಿ ಒಂದು ಭಾಗವೂ ಒಡೆಯಲ್ಪಟ್ಟದ್ದರಿಂದ ಮೂರನೇ ಭಾಗವು ಕತ್ತಲಾಯಿತು; ಹಗಲಿನೊಳಗೆ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಇತ್ತು; ರಾತ್ರಿಯು ಹಾಗೆಯೇ ಆಆಮೇಲೆ ನಾನು ನೋಡಲಾಗಿ ಇಗೋ, ಒಬ್ಬ ದೂತನು ಆಕಾಶ ಮಧ್ಯದಲ್ಲಿ ಹಾರುತ್ತಾ--ಇನ್ನೂ ಊದಬೇಕಾಗಿರುವ ಮೂವರು ದೂತರ ಮಿಕ್ಕಾದ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿ ಗಳಿಗೆ ಅಯ್ಯೋ, ಅಯ್ಯೋ, ಅಯ್ಯೋ ಎಂದು ಮಹಾ ಶಬ್ದದಿಂದ ಹೇಳುವದನ್ನು ಕೇಳಿದೆನು.

8:13b.REV.008.013 ಆಮೇಲೆ ನಾನು ನೋಡಲಾಗಿ ಇಗೋ, ಒಬ್ಬ ದೂತನು ಆಕಾಶ ಮಧ್ಯದಲ್ಲಿ ಹಾರುತ್ತಾ--ಇನ್ನೂ ಊದಬೇಕಾಗಿರುವ ಮೂವರು ದೂತರ ಮಿಕ್ಕಾದ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿ ಗಳಿಗೆ ಅಯ್ಯೋ, ಅಯ್ಯೋ, ಅಯ್ಯೋ ಎಂದು ಮಹಾ ಶಬ್ದದಿಂದ ಹೇಳುವದನ್ನು ಕೇಳಿದೆನು.

9

9:1b.REV.009.001 ಐದನೆಯ ದೂತನು ಊದಿದಾಗ ಆಕಾಶದಿಂದ ಭೂಮಿಗೆ ಬಿದ್ದ ಒಂದು ನಕ್ಷತ್ರವನ್ನು ಕಂಡೆನು. ಅವನಿಗೆ ತಳವಿಲ್ಲದ ತಗ್ಗಿನ ಬೀಗದ ಕೈ ಕೊಡಲ್ಪಟ್ಟಿತು.

9:2b.REV.009.002 ಅವನು ಆ ತಳವಿಲ್ಲದ ತಗ್ಗನ್ನು ತೆರೆದಾಗ ಅಲ್ಲಿಂದ ದೊಡ್ಡ ಕುಲುಮೆಯ ಹೊಗೆಯಂತೆ ಆ ತಗ್ಗಿನೊಳಗಿಂದ ಹೊಗೆಯು ಏರಿತು; ಆ ತಗ್ಗಿನ ಹೊಗೆಯ ದೆಸೆಯಿಂದ ಸೂರ್ಯನು ವಾಯು ಮಂಡಲವು ಕತ್ತಲಾದವು.

9:3b.REV.009.003 ಹೊಗೆಯೊಳಗಿಂದ ಮಿಡಿತೆಗಳು ಭೂಮಿಯ ಮೇಲೆ ಹೊರಟು ಬಂದವು. ಭೂಮಿಯಲ್ಲಿರುವ ಚೇಳುಗಳಿಗೆ ಬಲವಿರುವ ಪ್ರಕಾರ ಅವುಗಳಿಗೆ ಬಲವು ಕೊಡಲ್ಪಟ್ಟಿತು.

9:4b.REV.009.004 ಭೂಮಿಯ ಮೇಲಿರುವ ಹುಲ್ಲನ್ನಾಗಲೀ ಯಾವ ಹಸುರಾದ ದ್ದನ್ನಾಗಲೀ ಯಾವ ಮರವನ್ನಾಗಲೀ ಕೆಡಿಸದೆ ಹಣೆಯಮೇಲೆ ದೇವರ ಮುದ್ರೆಯಿಲ್ಲದ ಮನುಷ್ಯರನ್ನು ಮಾತ್ರ ಬಾಧಿಸಬೇಕೆಂದು ಅವುಗಳಿಗೆ ಅಪ್ಪಣೆಯಾಯಿತು.

9:5b.REV.009.005 ಅವರನ್ನು (ಮುದ್ರೆಯಿಲ್ಲದವರನ್ನು) ಕೊಲ್ಲದೆ ಐದು ತಿಂಗಳುಗಳವರೆಗೂ ಯಾತನೆಪಡಿಸಬೇಕೆಂದಾ ಯಿತು. ಅವರಿಗುಂಟಾದ ಯಾತನೆಯು ಮನುಷ್ಯನನ್ನು ಹೊಡೆಯುವ ಚೇಳಿನ ಯಾತನೆಯ ಹಾಗೆ ಇತ್ತು.

9:6b.REV.009.006 ಆ ದಿನಗಳಲ್ಲಿ ಮನುಷ್ಯರು ಮರಣವನ್ನು ಹುಡುಕಿ ಅದನ್ನು ಕಾಣದೆ ಇರುವರು; ಸಾಯಬೇಕೆಂದು ಕೋರು ವರು, ಆದರೆ ಮೃತ್ಯುವು ಅವರ ಬಳಿಯಿಂದ ಓಡಿ ಹೋಗುವದು

9:7b.REV.009.007 ಆ ಮಿಡಿತೆಗಳ ಆಕಾರಗಳು ಯುದ್ಧಕ್ಕೆ ಸನ್ನದ್ಧವಾಗಿರುವ ಕುದುರೆಗಳ ಆಕಾರದಂತೆ ಇದ್ದವು ಅವುಗಳ ತಲೆಯ ಮೇಲೆ ಚಿನ್ನದ ಕಿರೀಟಗಳೋ ಎಂಬಂತೆ ಇದ್ದವು; ಅವುಗಳ ಮುಖಗಳು ಮನುಷ್ಯರ ಮುಖಗಳ ಹಾಗೆ ಇದ್ದವು.

9:8b.REV.009.008 ಸ್ತ್ರೀಯರ ಕೂದಲಿ ನಂತಿರುವ ಕೂದಲು ಅವುಗಳಿಗೆ ಇತ್ತು; ಅವುಗಳ ಹಲ್ಲುಗಳು ಸಿಂಹದ ಹಲ್ಲುಗಳ ಹಾಗಿದ್ದವು.

9:9b.REV.009.009 ಅವುಗಳಿಗೆ ಕಬ್ಬಿಣದ ಕವಚಗಳಂತಿದ್ದ ಕವಚಗಳು ಇದ್ದವು; ಅವುಗಳ ರೆಕ್ಕೆಗಳ ಶಬ್ದವು ಯುದ್ಧಕ್ಕೆ ಓಡುವ ಅನೇಕ ರಥಾಶ್ವಗಳ ಶಬ್ದದ ಹಾಗೆ ಇತ್ತು.

9:10b.REV.009.010 ಚೇಳಿಗಿರುವಂತೆ ಅವುಗಳಿಗೆ ಬಾಲಗಳೂ ಆ ಬಾಲಗಳಲ್ಲಿ ಕೊಂಡಿಗಳೂ ಇದ್ದವು; ಮನುಷ್ಯರನ್ನು ಐದು ತಿಂಗಳುಗಳ ವರೆಗೂ ಬಾಧಿಸುವ ಬಲವು ಅವುಗಳಿಗೆ ಇತ್ತು.

9:11b.REV.009.011 ತಳವಿಲ್ಲದ ತಗ್ಗಿನ ದೂತನು ಅವುಗಳನ್ನಾಳುವ ಅರಸನು; ಅವನಿಗೆ ಇಬ್ರಿಯ ಭಾಷೆಯಲ್ಲಿ ಅಬದ್ದೋನನೆಂತಲೂ ಗ್ರೀಕ್‌ ಭಾಷೆಯಲ್ಲಿ ಅಪೊಲ್ಲುವೋನನೆಂತಲೂ ಹೆಸರು.

9:12b.REV.009.012 ಒಂದು ಆಪತ್ತು ಕಳೆದುಹೋಯಿತು; ಇದಾದ ಮೇಲೆ ಇಗೋ, ಇನ್ನೂ ಎರಡು ಆಪತ್ತುಗಳು ಬರುವದಕ್ಕಿವೆ.

9:13b.REV.009.013 ಆರನೆಯ ದೂತನು ಊದಿದಾಗ ದೇವರ ಸಮ್ಮುಖದಲ್ಲಿರುವ ಚಿನ್ನದ ವೇದಿಗಿದ್ದ ನಾಲ್ಕು ಕೊಂಬು ಗಳಿಂದ ಬಂದ ಧ್ವನಿಯನ್ನು ನಾನು ಕೇಳಿದೆನು.

9:14b.REV.009.014 ಅದು ತುತೂರಿಯನ್ನು ಹಿಡಿದಿದ್ದ ಆರನೆಯ ದೂತನಿಗೆ--ಯೂಫ್ರೇಟೀಸ್‌ ಮಹಾ ನದಿಯಲ್ಲಿ ಬಂಧಿಸಲ್ಪಟ್ಟಿರುವ ನಾಲ್ಕು ಮಂದಿ ದೂತರನ್ನು ಬಿಚ್ಚಿಬಿಡು ಎಂದು ಹೇಳಿತು.

9:15b.REV.009.015 ಆಗ ಮೂರರಲ್ಲಿ ಒಂದು ಭಾಗದ ಜನರನ್ನು ಸಂಹಾರ ಮಾಡುವ ತಾಸು, ದಿನ, ತಿಂಗಳು ಮತ್ತು ವರುಷಕ್ಕೆ ಸಿದ್ಧವಾಗಿದ್ದ ಆ ನಾಲ್ಕು ದೂತರನ್ನು ಬಿಚ್ಚಿದನು.

9:16b.REV.009.016 ಕುದುರೇ ದಂಡಿನವರ ಸಂಖ್ಯೆಯು ಇಪ್ಪತ್ತು ಕೋಟಿ ಎಂದು ನಾನು ಕೇಳಿದೆನು.

9:17b.REV.009.017 ನಾನು ದರ್ಶನದಲ್ಲಿ ಕುದುರೆಗಳನ್ನು ಕಂಡೆನು, ಅವುಗಳ ಮೇಲೆ ಕೂತಿದ್ದವರು ಬೆಂಕಿಯ ನೀಲಿಯ ಮತ್ತು ಗಂಧಕದ ಕವಚಗಳನ್ನು ಧರಿಸಿದ್ದರು; ಆ ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತಿದ್ದವು; ಅವುಗಳ ಬಾಯೊಳಗಿಂದ ಬೆಂಕಿ ಹೊಗೆ ಗಂಧಕ ಇವುಗಳು ಹೊರಡುತ್ತಿದ್ದವು.

9:18b.REV.009.018 ಅವುಗಳ ಬಾಯಿಂದ ಹೊರಟ ಆ ಬೆಂಕಿ ಹೊಗೆ ಗಂಧಕ ಈ ಮೂರರಿಂದ ಮನುಷ್ಯರಲ್ಲಿ ಮೂರನೇ ಭಾಗವು ಹತವಾಯಿತು.

9:19b.REV.009.019 ಅವುಗಳ ಬಲವು ಅವುಗಳ ಬಾಯಲ್ಲಿಯೂ ಬಾಲಗಳಲ್ಲಿಯೂ ಇರುತ್ತದೆ. ಅವುಗಳ ಬಾಲಗಳು ತಲೆಗಳುಳ್ಳವುಗಳಾಗಿ ಸರ್ಪಗಳ ಹಾಗೆ ಇದ್ದವು. ಅವುಗಳಿಂದ ಅವು ಕೇಡನ್ನುಂಟುಮಾಡು ತ್ತವೆ.

9:20b.REV.009.020 ಈ ಉಪದ್ರವಗಳಿಂದ ಕೊಲ್ಲಲ್ಪಡದೆ ಉಳಿದ ಮನುಷ್ಯರು ದೆವ್ವಗಳನ್ನೂ ಬಂಗಾರದ ವಿಗ್ರಹಗಳನ್ನೂ ಬೆಳ್ಳಿಯ, ಹಿತ್ತಾಳೆಯ, ಕಲ್ಲಿನ ಮತ್ತು ಮರದ ವಿಗ್ರಹ ಗಳನ್ನೂ ಅಂದರೆ ನೋಡಲಾರದ ಕೇಳಲಾರದ ಇಲ್ಲವೆ ನಡೆಯಲಾರದವುಗಳನ್ನು ಆರಾಧಿಸದಂತೆ ಮಾನ ಸಾಂತರಪಡದೆ ಹೋದರು.ಇದಲ್ಲದೆ ತಾವು ಮಾಡುತ್ತಿದ್ದ ಕೊಲೆ ಮಾಟ ಜಾರತ್ವ ಕಳ್ಳತನ ಇವುಗಳಿ ಗಾಗಿಯೂ ಮಾನಸಾಂತರಪಡಲಿಲ್ಲ.

9:21b.REV.009.021 ಇದಲ್ಲದೆ ತಾವು ಮಾಡುತ್ತಿದ್ದ ಕೊಲೆ ಮಾಟ ಜಾರತ್ವ ಕಳ್ಳತನ ಇವುಗಳಿ ಗಾಗಿಯೂ ಮಾನಸಾಂತರಪಡಲಿಲ್ಲ.

10

10:1b.REV.010.001 ಮೇಘವನ್ನು ಧರಿಸಿಕೊಂಡಿದ್ದ ಬಲಿಷ್ಠ ನಾದ ಮತ್ತೊಬ್ಬ ದೂತನು ಪರಲೋಕ ದಿಂದ ಇಳಿದು ಬರುವದನ್ನು ನಾನು ಕಂಡೆನು. ಅವನ ತಲೆಯ ಮೇಲೆ ಮಳೆ ಬಿಲ್ಲು ಇತ್ತು; ಅವನ ಮುಖವು ಸೂರ್ಯನಂತಿತ್ತು; ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು;

10:2b.REV.010.002 ತೆರೆದಿದ್ದ ಒಂದು ಚಿಕ್ಕ ಪುಸ್ತಕವು ಅವನ ಕೈಯಲ್ಲಿ ಇತ್ತು; ಅವನು ತನ್ನ ಬಲಗಾಲನ್ನು ಸಮುದ್ರದ ಮೇಲೆಯೂ ಎಡಗಾಲನ್ನು ಭೂಮಿಯ ಮೇಲೆಯೂ ಇಟ್ಟು

10:3b.REV.010.003 ಸಿಂಹವು ಗರ್ಜಿಸುವ ಪ್ರಕಾರ ಮಹಾಶಬ್ದದಿಂದ ಕೂಗಿದನು. ಅವನು ಕೂಗಿದಾಗ ಏಳು ಗುಡುಗುಗಳು ತಮ್ಮ ಧ್ವನಿಕೊಟ್ಟವು.

10:4b.REV.010.004 ಆ ಏಳು ಗುಡುಗುಗಳು ತಮ್ಮ ಧ್ವನಿಕೊಟ್ಟಾಗ ನಾನು ಬರೆಯ ಬೇಕೆಂದಿದ್ದೆನು. ಅದಕ್ಕೆ--ಆ ಏಳು ಗುಡುಗುಗಳು ನುಡಿದವುಗಳನ್ನು ನೀನು ಬರೆಯದೆ ಮುದ್ರಿಸು ಎಂದು ಪರಲೋಕದಿಂದ ಬಂದ ಶಬ್ದವು ನನಗೆ ಹೇಳುವದನ್ನು ಕೇಳಿದೆನು.

10:5b.REV.010.005 ಅನಂತರ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತಿದ್ದ ದೂತನನ್ನು ನಾನು ಕಂಡೆನು. ಅವನು ತನ್ನ ಕೈಯನ್ನು ಪರಲೋಕದ ಕಡೆಗೆ ಎತ್ತಿ--

10:6b.REV.010.006 ಪರಲೋಕವನ್ನೂ ಅದರಲ್ಲಿರುವವುಗಳನ್ನೂ ಭೂಮಿಯನ್ನೂ ಅದರಲ್ಲಿರುವವುಗಳನ್ನೂ ಸಮುದ್ರ ವನ್ನೂ ಅದರಲ್ಲಿರುವವುಗಳನ್ನೂ ಸೃಷ್ಟಿಸಿ ಯುಗ ಯುಗಾಂತರಗಳಲ್ಲಿ ಜೀವಿಸುವಾತನ ಮೇಲೆ ಆಣೆ ಯಿಟ್ಟು ಇನ್ನು ಸಮಯವಿರುವದಿಲ್ಲ ಎಂತಲೂ

10:7b.REV.010.007 ಏಳನೆಯ ದೂತನು ಶಬ್ದಮಾಡುವ ದಿನಗಳಲ್ಲಿ ಅಂದರೆ ಅವನು ತುತೂರಿಯನ್ನು ಊದುವದಕ್ಕೆ ಪ್ರಾರಂಭಿಸು ವಾಗ ದೇವರ ರಹಸ್ಯವನ್ನು ತನ್ನ ಸೇವಕರಾದ ಪ್ರವಾದಿ ಗಳಿಗೆ ತಿಳಿಸಿದ್ದ ಪ್ರಕಾರ ಸಮಾಪ್ತಿಯಾಗತಕ್ಕದ್ದು ಎಂತಲೂ ಹೇಳಿದನು.

10:8b.REV.010.008 ಪರಲೋಕದಿಂದ ನನಗೆ ಕೇಳಿಸಿದ್ದ ಶಬ್ದವು ತಿರಿಗಿ ನನ್ನೊಂದಿಗೆ ಮಾತನಾಡಿ--ನೀನು ಹೋಗಿ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತುಕೊಂಡಿರುವ ದೂತನ ಕೈಯಲ್ಲಿರುವ ತೆರೆದಿದ್ದ ಆ ಚಿಕ್ಕ ಪುಸ್ತಕವನ್ನು ತೆಗೆದುಕೋ ಎಂದು ಹೇಳಿತು.

10:9b.REV.010.009 ನಾನು ಆ ದೂತನ ಬಳಿಗೆ ಹೋಗಿ ಅವನಿಗೆ--ಆ ಚಿಕ್ಕ ಪುಸ್ತಕವನ್ನು ನನಗೆ ಕೊಡು ಎಂದು ಹೇಳಲು ಅವನು ನನಗೆ--ನೀನು ಇದನ್ನು ತೆಗೆದು ಕೊಂಡು ತಿಂದುಬಿಡು, ಇದು ನಿನ್ನ ಹೊಟ್ಟೆಯನ್ನು ಕಹಿಯಾಗುವಂತೆ ಮಾಡುವದು, ಆದರೆ ನಿನ್ನ ಬಾಯಲ್ಲಿ ಅದು ಜೇನಿನಂತೆ ಸಿಹಿಯಾಗಿರುವದು ಎಂದು ಹೇಳಿ ದನು

10:10b.REV.010.010 ಆಗ ನಾನು ಆ ಚಿಕ್ಕ ಪುಸ್ತಕವನ್ನು ಆ ದೂತನ ಕೈಯಿಂದ ತೆಗೆದುಕೊಂಡು ತಿಂದುಬಿಟ್ಟೆನು. ಅದು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು; ಅದನ್ನು ತಿಂದ ಕೂಡಲೆ ನನ್ನ ಹೊಟ್ಟೆಯು ಕಹಿ ಯಾಯಿತು.ಅವನು ನನಗೆ--ನೀನು ಅನೇಕ ಪ್ರಜೆ, ಜನಾಂಗ, ಭಾಷೆ ಮತ್ತು ರಾಜರುಗಳ ಮುಂದೆ ತಿರಿಗಿ ಪ್ರವಾದಿಸತಕ್ಕದ್ದು ಎಂದು ಹೇಳಿದನು.

10:11b.REV.010.011 ಅವನು ನನಗೆ--ನೀನು ಅನೇಕ ಪ್ರಜೆ, ಜನಾಂಗ, ಭಾಷೆ ಮತ್ತು ರಾಜರುಗಳ ಮುಂದೆ ತಿರಿಗಿ ಪ್ರವಾದಿಸತಕ್ಕದ್ದು ಎಂದು ಹೇಳಿದನು.

11

11:1b.REV.011.001 ತರುವಾಯ ಕೋಲಿನಂತಿದ್ದ ಒಂದು ದಂಡ ನನಗೆ ಕೊಡಲ್ಪಟ್ಟಿತು ಮತ್ತು ಆ ದೂತನು ನಿಂತುಕೊಂಡು ಎದ್ದು ದೇವರ ಆಲಯವನ್ನೂ ಯಜ್ಞವೇದಿಯನ್ನೂ ಆಲಯದಲ್ಲಿ ಆರಾಧನೆ ಮಾಡು ವವರನ್ನೂ ಅಳತೆಮಾಡು.

11:2b.REV.011.002 ಆದರೆ ಆಲಯದ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು; ಯಾಕಂದರೆ ಅದು ಅನ್ಯ ಜನರಿಗೆ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಾಲ್ವತ್ತೆರಡು ತಿಂಗಳು ತುಳಿದಾಡುವರು.

11:3b.REV.011.003 ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು.

11:4b.REV.011.004 ಭೂಲೋಕದ ದೇವರ ಮುಂದೆ ನಿಂತಿರುವ ಎರಡು ಎಣ್ಣೆಯ ಮರಗಳೂ ಎರಡು ದೀಪಸ್ತಂಭಗಳೂ ಇವರೇ.

11:5b.REV.011.005 ಇವರಿಗೆ ಯಾವ ನಾದರೂ ಕೇಡನ್ನು ಮಾಡಬೇಕೆಂದಿದ್ದರೆ ಇವರ ಬಾಯೊಳಗಿಂದ ಬೆಂಕಿ ಹೊರಟು ಇವರ ಶತ್ರುಗಳನ್ನು ನುಂಗಿ ಬಿಡುವದು; ಇವರಿಗೆ ಯಾವನಾದರೂ ಕೇಡನ್ನು ಉಂಟು ಮಾಡಬೇಕೆಂದಿದ್ದರೆ ಅವನು ಈ ರೀತಿಯಾಗಿ ಕೊಲೆಯಾಗಬೇಕು.

11:6b.REV.011.006 ಅವರ ಪ್ರವಾದನೆಯ ದಿನ ಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಉಂಟು. ಇದಲ್ಲದೆ ಇವರಿಗೆ ಇಷ್ಟ ಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹೊಡೆಯುವದಕ್ಕೂ ಅಧಿಕಾರ ಉಂಟು.

11:7b.REV.011.007 ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದ ನಂತರ ತಳವಿಲ್ಲದ ತಗ್ಗಿನಿಂದ ಏರಿ ಬರುವ ಮೃಗವು ಇವರಿಗೆ ವಿರೋಧವಾಗಿ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವದು.

11:8b.REV.011.008 ಇವರ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಆತ್ಮಿಕವಾಗಿ ಸೊದೋಮ್‌ ಎಂತಲೂ ಐಗುಪ್ತ ಎಂತಲೂ ಕರೆಯುವರು; ನಮ್ಮ ಕರ್ತನು ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟನು.

11:9b.REV.011.009 ಆಗ ಪ್ರಜೆ ಕುಲ ಭಾಷೆ ಜನಾಂಗಗಳವರು ಸತ್ತುಹೋದ ಅವರ ಶವಗಳನ್ನು ಮೂರುವರೆ ದಿನಗಳು ನೋಡುವರು, ಸತ್ತುಹೋದ ಅವರ ಶವಗಳನ್ನು ಸಮಾಧಿಯಲ್ಲಿ ಇಡ ಗೊಡಿಸುವದಿಲ್ಲ.

11:10b.REV.011.010 ಈ ಇಬ್ಬರು ಪ್ರವಾದಿಗಳು ಭೂಮಿಯ ಮೇಲೆ ವಾಸ ಮಾಡುವವರನ್ನು ಯಾತನೆ ಪಡಿಸಿದ್ದರಿಂದ ಇವರ ವಿಷಯದಲ್ಲಿ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ದಾನಗಳನ್ನು ಕಳುಹಿಸುವರು ಎಂದು ಹೇಳಿದನು.

11:11b.REV.011.011 ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಾತ್ಮ ಬಂದು ಆ ಶವಗಳಲ್ಲಿ ಸೇರಲು ಅವು ಕಾಲೂರಿ ನಿಂತವು. ಅವರನ್ನು ನೋಡಿದವರಿಗೆ ಮಹಾ ಭಯವು ಹಿಡಿಯಿತು.

11:12b.REV.011.012 ಆಮೇಲೆ ಅವರಿಗೆ--ಇಲ್ಲಿ ಮೇಲಕ್ಕೆ ಬನ್ನಿರಿ ಎಂದು ಹೇಳುವ ಪರಲೋಕದ ಮಹಾಶಬ್ದವನ್ನು ಅವರು ಕೇಳಿದರು. ಆಗ ಅವರು ಮೇಘದಲ್ಲಿ ಪರಲೋಕಕ್ಕೆ ಏರಿಹೋದರು; ಅವರ ಶತ್ರುಗಳು ಅವರನ್ನು ನೋಡಿದರು.

11:13b.REV.011.013 ಅದೇ ತಾಸಿನಲ್ಲಿ ಮಹಾಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದ ಂಶವು ಬಿದ್ದು ಹೋಯಿತು; ಆ ಭೂಕಂಪದಲ್ಲಿ ಏಳು ಸಾವಿರ ಮಂದಿ ಹತರಾದರು ಉಳಿದವರು ಭಯ ಗ್ರಸ್ಥರಾಗಿ ಪರಲೋಕದ ದೇವರನ್ನು ಮಹಿಮೆ ಪಡಿಸಿದರು.

11:14b.REV.011.014 ಎರಡನೆಯ ಆಪತ್ತು ಕಳೆದುಹೋಯಿತು; ಇಗೋ, ಮೂರನೆಯ ಆಪತ್ತು ಬೇಗನೆ ಬರುತ್ತದೆ.

11:15b.REV.011.015 ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.

11:16b.REV.011.016 ತರುವಾಯ ದೇವರ ಸಮಕ್ಷಮದಲ್ಲಿ ತಮ ತಮ್ಮ ಆಸನಗಳ ಮೇಲೆ ಕೂತಿರುವ ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡಬಿದ್ದು--

11:17b.REV.011.017 ಓ ಕರ್ತನೇ, ಸರ್ವಶಕ್ತನಾದ ದೇವರೇ, ಇರುವಾತನೂ ಇದ್ದಾತನೂ ಬರುವಾತನೂ ಆಗಿರುವ ನೀನು ನಿನ್ನ ಮಹಾಅಧಿಕಾರ ವನ್ನು ವಹಿಸಿಕೊಂಡು ಆಳಿದ್ದರಿಂದ ನಾವು ನಿನಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತೇವೆ ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು.

11:18b.REV.011.018 ಜನಾಂಗಗಳು ಕೋಪಿಸಿ ಕೊಂಡವು, ನಿನ್ನ ಕೋಪವು ಬಂದಿತು. ಸತ್ತವರು ತೀರ್ಪು ಹೊಂದುವದಕ್ಕೂ ನೀನು ನಿನ್ನ ಸೇವಕರಾದ ಪ್ರವಾದಿಗಳಿಗೂ ಪರಿಶುದ್ಧರಿಗೂ ನಿನ್ನ ನಾಮಕ್ಕೆ ಭಯಪಡುವ ಚಿಕ್ಕವರಿಗೂ ದೊಡ್ಡವರಿಗೂ ಪ್ರತಿ ಫಲವನ್ನು ಕೊಡುವದಕ್ಕೆ ಮತ್ತು ಭೂಮಿಯನ್ನು ನಾಶಮಾಡುವವರನುಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.

11:19b.REV.011.019 ಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.

12

12:1b.REV.012.001 ಪರಲೋಕದಲ್ಲಿ ಮಹಾ ಅದ್ಭುತವು ಕಾಣಿಸಿತು; ಅಲ್ಲಿ ಸೂರ್ಯನನ್ನು ಧರಿಸಿ ಕೊಂಡಿದ್ದ ಒಬ್ಬ ಸ್ತ್ರೀಯಿದ್ದಳು; ಆಕೆಯ ಕಾಲುಗಳ ಕೆಳಗೆ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳುಳ್ಳ ಒಂದು ಕಿರೀಟವಿತ್ತು.

12:2b.REV.012.002 ಆಕೆಯು ಗರ್ಭಿಣಿಯಾಗಿದ್ದು ಪ್ರಸವವೇದನೆಯಿಂದ ಹೆರುವದಕ್ಕೆ ಸಂಕಟಪಡುತ್ತಾ ಕೂಗುತ್ತಿದ್ದಳು.

12:3b.REV.012.003 ಪರಲೋಕದಲ್ಲಿ ಮತ್ತೊಂದು ಅದ್ಭುತವು ಕಾಣಿಸಿತು; ಆಗ ಇಗೋ, ಕೆಂಪಾದ ಮಹಾ ಘಟಸರ್ಪವಿತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು; ಅದರ ತಲೆಗಳ ಮೇಲೆ ಏಳು ಕಿರೀಟಗಳಿದ್ದವು.

12:4b.REV.012.004 ಅದರ ಬಾಲವು ಆಕಾಶದಲ್ಲಿರುವ ನಕ್ಷತ್ರಗಳೊಳಗೆ ಮೂರರ ಲ್ಲೊಂದು ಭಾಗವನ್ನು ಎಳೆದು ಭೂಮಿಗೆ ಹಾಕಿತು. ಹೆರುವದಕ್ಕೆ ಸಿದ್ಧವಾಗಿದ್ದ ಆ ಸ್ತ್ರೀಯು ಹೆತ್ತಕೂಡಲೆ ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟ ಸರ್ಪವು ಅವಳ ಮುಂದೆ ನಿಂತುಕೊಂಡಿತ್ತು.

12:5b.REV.012.005 ಆಕೆ ಜನಾಂಗಗಳನ್ನೆಲ್ಲಾ ಕಬ್ಬಿಣದ ಕೋಲಿನಿಂದ ಆಳ ಬೇಕಾಗಿದ್ದ ಒಂದು ಗಂಡು ಮಗುವನ್ನು ಹೆತ್ತಳು; ಆ ಕೂಸು ದೇವರ ಬಳಿಗೂ ಆತನ ಸಿಂಹಾಸನದ ಬಳಿಗೂ ಎತ್ತಲ್ಪಟ್ಟಿತು.

12:6b.REV.012.006 ಆ ಸ್ತ್ರೀಯು ಅರಣ್ಯಕ್ಕೆ ಓಡಿ ಹೋದಳು; ಅಲ್ಲಿ ಆಕೆಗೆ ಸಾವಿರದ ಇನ್ನೂರ ಅರವತ್ತು ದಿನಗಳವರೆಗೆ ಪೋಷಣೆಯಾಗಬೇಕೆಂದು ದೇವರು ಸ್ಥಳವನ್ನು ಸಿದ್ಧಮಾಡಿದ್ದನು.

12:7b.REV.012.007 ಇದಲ್ಲದೆ ಪರಲೋಕದಲ್ಲಿ ಯುದ್ಧ ನಡೆಯಿತು. ವಿಾಕಾಯೇಲನೂ ಅವನ ದೂತರೂ ಘಟಸರ್ಪಕ್ಕೆ ವಿರೋಧವಾಗಿ ಯುದ್ಧಮಾಡಿದರು; ಘಟಸರ್ಪನೂ ಅವನ ದೂತರೂ ಯುದ್ದಮಾಡಿ ಸೋತು ಹೋದರು.

12:8b.REV.012.008 ಆಗ ಪರಲೋಕದಲ್ಲಿ ಅವರಿಗೆ ಸ್ಥಾನವು ಇನ್ನೆಂದಿಗೂ ಇಲ್ಲದೆ ಹೋಯಿತು.

12:9b.REV.012.009 ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು.

12:10b.REV.012.010 ಆಗ ಪರಲೋಕದಲ್ಲಿ ಮಹಾಶಬ್ದವನ್ನು ನಾನು ಕೇಳಿದೆನು. ಅದು--ಈಗ ರಕ್ಷಣೆಯೂ ಶಕ್ತಿಯೂ ನಮ್ಮ ದೇವರ ರಾಜ್ಯವೂ ಆತನ ಕ್ರಿಸ್ತನ ಅಧಿಕಾರವೂ ಬಂದವು; ಯಾಕಂದರೆ ಹಗಲಿರುಳು ನಮ್ಮ ಸಹೋದರರ ಮೇಲೆ ನಮ್ಮ ದೇವರ ಮುಂದೆ ದೂರು ಹೇಳಿದ ದೂರು ಗಾರನು ದೊಬ್ಬಲ್ಪಟ್ಟಿದ್ದಾನೆ.

12:11b.REV.012.011 ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವ ನನ್ನು ಜಯಿಸಿದರು.

12:12b.REV.012.012 ಆದದರಿಂದ ಪರಲೋಕಗಳೇ, ಅದರಲ್ಲಿ ವಾಸಮಾಡುವವರೇ, ಹರ್ಷಗೊಳ್ಳಿರಿ. ಭೂಮಿಯ ಮೇಲೆ ಮತ್ತು ಸಮುದ್ರದಲ್ಲಿ ಇರುವವರಿಗೆ ಅಯ್ಯೊ! ಯಾಕಂದರೆ ಸೈತಾನನು ತನಗಿರುವ ಕಾಲವು ಸ್ವಲ್ಪವೆಂದು ತಿಳಿದು ಮಹಾರೌದ್ರವುಳ್ಳವನಾಗಿ ನಿಮ್ಮ ಕಡೆಗೆ ಇಳಿದು ಬಂದಿದ್ದಾನೆ ಎಂಬದಾಗಿ ಹೇಳಿತು.

12:13b.REV.012.013 ಘಟಸರ್ಪವು ತಾನು ದೊಬ್ಬಲ್ಪಟ್ಟು ಭೂಮಿಗೆ ಬಿದ್ದಿರುವದನ್ನು ಕಂಡು ಗಂಡುಮಗುವನ್ನು ಹೆತ್ತಸ್ತ್ರೀ ಯನ್ನು ಹಿಂಸಿಸಿತು.

12:14b.REV.012.014 ಆ ಸ್ತ್ರೀಯು ಅರಣ್ಯದಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವದಕ್ಕಾಗಿ ಆಕೆಗೆ ದೊಡ್ಡ ಹದ್ದಿನ ಎರಡು ರೆಕ್ಕೆಗಳು ಕೊಡಲ್ಪಟ್ಟವು; ಅಲ್ಲಿ ಒಂದು ಕಾಲ, ಕಾಲಗಳು, ಅರ್ಧ ಕಾಲ ಸರ್ಪನ ಮುಖಕ್ಕೆ ಮರೆಯಾಗಿ ಪೋಷಣೆ ಹೊಂದುತ್ತಾಳೆ.

12:15b.REV.012.015 ಆ ಸ್ತ್ರೀಯನ್ನು ಪ್ರವಾಹವು ಬಡಕೊಂಡು ಹೋಗ ಬೇಕೆಂದು ಆಕೆಯ ಹಿಂದೆ ಸರ್ಪವು ತನ್ನ ಬಾಯೊಳಗಿಂದ ನೀರನ್ನು ಪ್ರವಾಹದಂತೆ ಬಿಟ್ಟಿತು.

12:16b.REV.012.016 ಆದರೆ ಭೂಮಿಯು ಆ ಸ್ತ್ರೀಯ ಸಹಾಯಕ್ಕೆ ಬಂದು ತನ್ನ ಬಾಯಿ ತೆರೆದು ಘಟಸರ್ಪನು ತನ್ನ ಬಾಯೊಳಗಿಂದ ಬಿಟ್ಟ ಪ್ರವಾಹವನ್ನು ಕುಡಿದುಬಿಟ್ಟಿತು.ಆಗ ಘಟಸರ್ಪನು ಸ್ತ್ರೀಯ ಮೇಲೆ ಕೋಪಿಸಿಕೊಂಡು ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಕೈಕೊಂಡು ನಡೆದು ಯೇಸು ಕ್ರಿಸ್ತನ ವಿಷಯವಾದ ಸಾಕ್ಷಿಯನ್ನು ಹೇಳಿರುವವರ ಮೇಲೆ ಯುದ್ಧ ಮಾಡುವದಕ್ಕೆ ಹೊರಟನು.

12:17b.REV.012.017 ಆಗ ಘಟಸರ್ಪನು ಸ್ತ್ರೀಯ ಮೇಲೆ ಕೋಪಿಸಿಕೊಂಡು ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಕೈಕೊಂಡು ನಡೆದು ಯೇಸು ಕ್ರಿಸ್ತನ ವಿಷಯವಾದ ಸಾಕ್ಷಿಯನ್ನು ಹೇಳಿರುವವರ ಮೇಲೆ ಯುದ್ಧ ಮಾಡುವದಕ್ಕೆ ಹೊರಟನು.

13

13:1b.REV.013.001 ಆಗ ನಾನು ಸಮುದ್ರದ ಮರಳಿನ ಮೇಲೆ ನಿಂತೆನು, ಸಮುದ್ರದೊಳಗಿಂದ ಮೃಗವು ಏರಿ ಬರುವದನ್ನು ಕಂಡೆನು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಕೊಂಬುಗಳ ಮೇಲೆ ಹತ್ತು ಕಿರೀಟಗಳೂ ತಲೆಗಳ ಮೇಲೆ ದೂಷಣೆಯ ನಾಮವೂ ಇದ್ದವು.

13:2b.REV.013.002 ನಾನು ಕಂಡ ಮೃಗವು ಚಿರತೆಯಂತಿತ್ತು; ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಂತೆಯೂ ಇದ್ದವು; ಅದಕ್ಕೆ ಘಟಸರ್ಪವು ತನ್ನ ಶಕ್ತಿಯನ್ನೂ ತನ್ನ ಆಸನವನ್ನು ಮಹಾ ಅಧಿಕಾರವನ್ನೂ ಕೊಟ್ಟಿತು.

13:3b.REV.013.003 ಅದರ ತಲೆಗಳಲ್ಲಿ ಒಂದು ಗಾಯ ಹೊಂದಿ ಸಾಯುವಹಾಗಿರುವದನ್ನು ನಾನು ಕಂಡೆನು. ಮರಣಕರವಾದ ಆ ಗಾಯವು ವಾಸಿಯಾಯಿತು; ಆಗ ಭೂಲೋಕದವರೆಲ್ಲರು ಆ ಮೃಗದ ವಿಷಯವಾಗಿ ಆಶ್ಚರ್ಯಪಟ್ಟರು.

13:4b.REV.013.004 ಘಟ ಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವ ನಾದ್ದರಿಂದ ಅವರು ಆ ಘಟಸರ್ಪನನ್ನು ಆರಾಧನೆ ಮಾಡುವವರಾದರು. ಇದಲ್ಲದೆ ಆ ಮೃಗವನ್ನು ಆರಾ ಧಿಸಿ--ಈ ಮೃಗಕ್ಕೆ ಸಮಾನರು ಯಾರು? ಇದರ ಮೇಲೆ ಯುದ್ಧ ಮಾಡುವದಕ್ಕೆ ಯಾರು ಶಕ್ತರು ಅಂದರು.

13:5b.REV.013.005 ಬಡಾಯಿ ಮಾತುಗಳನ್ನೂ ದೂಷಣೆಯ ಮಾತು ಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು. ನಾಲ್ವತ್ತೆರಡು ತಿಂಗಳುಗಳವರೆಗೆ ಮುಂದುವರಿಯುವ ಹಾಗೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.

13:6b.REV.013.006 ಆಗ ಅದು ದೇವರ ಹೆಸರನ್ನೂ ಆತನ ಗುಡಾರವನ್ನೂ ಪರಲೋಕದಲ್ಲಿ ವಾಸವಾಗಿರುವವರನ್ನೂ ದೂಷಿಸಿ ದ್ದಲ್ಲದೆ ದೇವರಿಗೆ ವಿರೋಧವಾದ ದೂಷಣೆಗೆ ತನ್ನ ಬಾಯಿಯನ್ನು ತೆರೆಯಿತು.

13:7b.REV.013.007 ಇದಲ್ಲದೆ ಪರಿಶುದ್ಧರ ಮೇಲೆ ಯುದ್ಧಮಾಡಿ ಅವರನ್ನು ಗೆಲ್ಲುವಂತೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು. ಸಕಲ ಕುಲ ಭಾಷೆ ಜನಾಂಗಗಳ ಮೇಲೆ ಅವನಿಗೆ ಅಧಿಕಾರವು ಕೊಡಲ್ಪಟ್ಟಿತು.

13:8b.REV.013.008 ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಯಾರಾರ ಹೆಸರುಗಳು ವಧಿಸಲ್ಪಟ್ಟ ಕುರಿಮರಿಯಾದಾ ತನ ಜೀವಗ್ರಂಥದಲ್ಲಿ ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಮೃಗವನ್ನು ಆರಾಧಿಸುವರು.

13:9b.REV.013.009 ಕಿವಿಯುಳ್ಳವನು ಕೇಳಲಿ.

13:10b.REV.013.010 ಸೆರೆಗೆ ನಡಿಸುವವನು ಸೆರೆಗೆ ಹೋಗುವನು; ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಕೊಲೆಯಾಗಬೇಕು. ಇದರಲ್ಲಿ ಪರಿ ಶುದ್ಧರ ತಾಳ್ಮೆಯೂ ನಂಬಿಕೆಯೂ ಇರುತ್ತದೆ.

13:11b.REV.013.011 ಮತ್ತೊಂದು ಮೃಗವು ಭೂಮಿಯೊಳಗಿಂದ ಬರು ವದನ್ನು ನಾನು ಕಂಡೆನು. ಇದಕ್ಕೆ ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು; ಇದು ಘಟಸರ್ಪದಂತೆ ಮಾತನಾಡಿತು.

13:12b.REV.013.012 ಇದು ಮೊದಲನೆಯ ಮೃಗದ ಅಧಿಕಾರವನ್ನೆಲ್ಲಾ ಅದರ ಮುಂದೆಯೇ ನಡಿಸುತ್ತದೆ. ಮರಣಕರವಾದ ಗಾಯ ವಾಸಿಯಾದ ಮೊದಲನೆಯ ಮೃಗಕ್ಕೆ ಭೂಲೋಕವೂ ಭೂನಿವಾಸಿಗಳೂ ಆರಾಧಿಸು ವಂತೆ ಇದು ಮಾಡುವಂಥದ್ದಾಗಿದೆ.

13:13b.REV.013.013 ಇದು ಮಹ ತ್ತಾದ ಸೂಚಕಕಾರ್ಯಗಳನ್ನು ನಡಿಸುವಂಥದ್ದಾಗಿ ಜನರ ಮುಂದೆ ಬೆಂಕಿಯು ಆಕಾಶದಿಂದ ಭೂಮಿಗೆ ಇಳಿದು ಬರುವಂತೆ ಮಾಡುತ್ತದೆ.

13:14b.REV.013.014 ಮೃಗದ ಮುಂದೆ ಇಂಥಾ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರ ವನ್ನು ಹೊಂದಿ ಭೂಮಿಯ ಮೇಲೆ ವಾಸಿಸುವ ಜನರನ್ನು ಮೋಸಗೊಳಿಸುವದಲ್ಲದೆ ಕತ್ತಿಯಿಂದ ಗಾಯಹೊಂದಿ ಬದುಕಿದ ಮೃಗಕ್ಕಾಗಿ ವಿಗ್ರಹವನ್ನು ಮಾಡಿಕೊಳ್ಳ ಬೇಕೆಂದು ಅವರಿಗೆ ಹೇಳುತ್ತದೆ.

13:15b.REV.013.015 ಮೃಗದ ವಿಗ್ರಹವು ಮಾತನಾಡುವಂತೆಯೂ ಆ ಮೃಗದ ವಿಗ್ರಹವನ್ನು ಯಾರಾರು ಆರಾಧಿಸುವದಿಲ್ಲವೋ ಅವರನ್ನು ಕೊಲ್ಲಿಸು ವಂತೆಯೂ ಆ ಮೃಗದ ವಿಗ್ರಹಕ್ಕೆ ಜೀವ ಕೊಡುವ ಅಧಿಕಾರವು ಅದಕ್ಕೆ ಇತ್ತು.

13:16b.REV.013.016 ಅದು ಚಿಕ್ಕವರು ದೊಡ್ಡ ವರು ಐಶ್ವರ್ಯವಂತರು ಬಡವರು ಸ್ವತಂತ್ರರು ದಾಸರು ಎಲ್ಲರೂ ತಮ್ಮ ತಮ್ಮ ಬಲಗೈಯ ಮೇಲಾಗಲಿ ಹಣೆಗಳ ಮೇಲಾಗಲಿ ಗುರುತು ಹೊಂದಬೇಕೆಂತಲೂ

13:17b.REV.013.017 ಆ ಗುರುತಾಗಲಿ ಮೃಗದ ಹೆಸರಾಗಲಿ ಅದರ ಹೆಸರಿನ ಅಂಕೆಯಾಗಲಿ ಇಲ್ಲದವನು ಕ್ರಯ ವಿಕ್ರಯಗಳನ್ನು ಮಾಡದಂತೆಯೂ ಅದು ಮಾಡುತ್ತದೆ.ಇದರಲ್ಲಿ ಜ್ಞಾನವಿದೆ. ತಿಳುವಳಿಕೆಯುಳ್ಳವನು ಆ ಮೃಗದ ಅಂಕೆಯನ್ನು ಎಣಿಸಲಿ; ಯಾಕಂದರೆ ಅದು ಒಬ್ಬ ಮನುಷ್ಯನ ಅಂಕೆಯಾಗಿದೆ; ಅವನ ಅಂಕೆಯು ಆರುನೂರ ಅರವತ್ತಾರು.

13:18b.REV.013.018 ಇದರಲ್ಲಿ ಜ್ಞಾನವಿದೆ. ತಿಳುವಳಿಕೆಯುಳ್ಳವನು ಆ ಮೃಗದ ಅಂಕೆಯನ್ನು ಎಣಿಸಲಿ; ಯಾಕಂದರೆ ಅದು ಒಬ್ಬ ಮನುಷ್ಯನ ಅಂಕೆಯಾಗಿದೆ; ಅವನ ಅಂಕೆಯು ಆರುನೂರ ಅರವತ್ತಾರು.

14

14:1b.REV.014.001 ಆಗ ಇಗೋ, ಕುರಿಮರಿಯಾದಾತನು ಚೀಯೋನ್‌ ಪರ್ವತದ ಮೇಲೆ ನಿಂತಿರು ವದನ್ನು ನಾನು ಕಂಡೆನು. ಆತನ ಜೊತೆಯಲ್ಲಿ ಒಂದು ಲಕ್ಷ ನಾಲ್ವತ್ತುನಾಲ್ಕು ಸಾವಿರ ಮಂದಿ ಇದ್ದರು; ಅವರ ಹಣೆಗಳ ಮೇಲೆ ಆತನ ತಂದೆಯ ಹೆಸರು ಬರೆಯ ಲ್ಪಟ್ಟಿತು.

14:2b.REV.014.002 ಇದಲ್ಲದೆ ಪರಲೋಕದ ಕಡೆಯಿಂದ ಬಹಳ ನೀರುಗಳಂತೆಯೂ ಮಹಾಗುಡುಗಿನಂತೆಯೂ ಇದ್ದ ಶಬ್ದವನ್ನು ನಾನು ಕೇಳಿದೆನು. ತಮ್ಮ ವೀಣೆಗಳನ್ನು ಬಾರಿಸುತ್ತಿದ್ದ ವೀಣೆಗಾರರ ಸ್ವರವನ್ನೂ ನಾನು ಕೇಳಿದೆನು.

14:3b.REV.014.003 ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡಿನಂತಿದ್ದ ಹಾಡನ್ನು ಅವರು ಹಾಡಿದರು. ಭೂ ಲೋಕದೊಳಗಿಂದ ವಿಮೋಚಿಸಲ್ಪಟ್ಟ ಆ ಲಕ್ಷದ ನಾಲ್ವತ್ತು ನಾಲ್ಕು ಸಾವಿರ ಜನರೇ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.

14:4b.REV.014.004 ಸ್ತ್ರೀಯ ರೊಂದಿಗೆ ಮಲಿನರಾಗದವರು ಇವರೇ. ಯಾಕಂದರೆ ಇವರು ಕನ್ನಿಕೆಯರು. ಕುರಿಮರಿಯಾದಾತನು ಎಲ್ಲಿಗೆ ಹೋದರೂ ಆತನ ಹಿಂದೆ ಹೋಗುವವರು ಇವರೇ. ದೇವರಿಗೂ ಕುರಿಮರಿಯಾದಾತನಿಗೂ ಪ್ರಥಮ ಫಲ ವಾಗಿರುವ ಇವರು ಮನುಷ್ಯರೊಳಗಿಂದ ವಿಮೋಚಿಸ ಲ್ಪಟ್ಟವರು.

14:5b.REV.014.005 ಇವರ ಬಾಯಲ್ಲಿ ವಂಚನೆ ಸಿಕ್ಕಲಿಲ್ಲ; ಯಾಕಂದರೆ ಇವರು ದೇವರ ಸಿಂಹಾಸನದ ಮುಂದೆ ನಿರ್ದೋಷಿಗಳಾಗಿದ್ದಾರೆ.

14:6b.REV.014.006 ಭೂಮಿಯಲ್ಲಿ ವಾಸಿಸುವ ಪ್ರತಿಯೊಂದು ಜನಾಂಗ ಕ್ಕೂ ಕುಲದವರಿಗೂ ಭಾಷೆಯವರಿಗೂ ಮತ್ತು ಜನ ರಿಗೂ ಸಾರುವದಕ್ಕೆ ನಿತ್ಯವಾದ ಸುವಾರ್ತೆ ಇದ್ದ ಇನ್ನೊಬ್ಬ ದೂತನು ಆಕಾಶದ ಮಧ್ಯದಲ್ಲಿ ಹಾರುವದನ್ನು ನಾನು ಕಂಡೆನು.

14:7b.REV.014.007 ಅವನು--ದೇವರಿಗೆ ಭಯಪಟ್ಟು ಆತನನ್ನು ಘನಪಡಿಸಿರಿ; ಯಾಕಂದರೆ ಆತನು ನ್ಯಾಯತೀರ್ಪು ಮಾಡುವ ಗಳಿಗೆ ಬಂದದೆ; ಪರಲೋಕವನ್ನೂ ಭೂ ಲೋಕವನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಉಂಟು ಮಾಡಿದಾತನನ್ನೇ ಆರಾಧಿಸಿರಿ ಎಂದು ಮಹಾ ಶಬ್ದದಿಂದ ಹೇಳಿದನು.

14:8b.REV.014.008 ಅವನ ಹಿಂದೆ ಇನ್ನೊಬ್ಬ ದೂತನು ಬಂದು--ಬಾಬೆಲೆಂಬ ಆ ಮಹಾನಗರಿಯು ಬಿದ್ದಳು, ಬಿದ್ದಳು; ಯಾಕಂದರೆ ಅವಳು ತನ್ನ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಸಕಲ ಜನಾಂಗಗಳು ಕುಡಿಯುವಂತೆ ಮಾಡಿದಳು ಎಂದು ಹೇಳಿದನು.

14:9b.REV.014.009 ತರುವಾಯ ಮೂರನೆಯ ದೂತನು ಅವರನ್ನು ಹಿಂಬಾಲಿಸಿ--ಯಾರಾದರೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ ತನ್ನ ಹಣೆಯ ಮೇಲಾಗಲಿ ತನ್ನ ಕೈಯ ಮೇಲಾಗಲಿ ಅದರ ಗುರುತು ಹಾಕಿಸಿ ಕೊಂಡರೆ

14:10b.REV.014.010 ಅಂಥವನು ದೇವರ ಕೋಪವೆಂಬ ಪಾತ್ರೆ ಯಲ್ಲಿ ಏನೂ ಬೆರಸದೆ ಹಾಕಿದ ಆತನ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೂತರ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದ ಮತ್ತು ಗಂಧಕದಿಂದ ಯಾತನೆಪಡು ವನು.

14:11b.REV.014.011 ಅವರ ಯಾತನೆಯ ಹೊಗೆಯು ಯುಗ ಯುಗಾಂತರಗಳಲ್ಲಿ ಏರುತ್ತಿರುವದು. ಆ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡುವವರೂ ಅದರ ಹೆಸರಿನ ಗುರುತನ್ನು ಹಾಕಿಸಿಕೊಂಡಿರುವವರೂ ಹಗಲಿ ರುಳು ವಿಶ್ರಾಂತಿಯಿಲ್ಲದೆ ಇರುವರು ಎಂದು ಮಹಾ ಶಬ್ದದಿಂದ ಹೇಳಿದನು.

14:12b.REV.014.012 ದೇವರ ಆಜ್ಞೆ ಗಳನ್ನೂ ಯೇಸುವಿನ ಮೇಲಣ ನಂಬಿಕೆಯನ್ನೂ ಕಾಪಾಡುವ ಪರಿಶುದ್ಧರ ತಾಳ್ಮೆಯು ಇದರಲ್ಲಿ ಇರುತ್ತದೆ.

14:13b.REV.014.013 ಪರಲೋಕದಿಂದ ಬಂದ ಶಬ್ದವನ್ನು ನಾನು ಕೇಳಿ ದೆನು. ಅದು--ಇಂದಿನಿಂದ ಕರ್ತನಲ್ಲಿ ಯಾರಾರು ಸಾಯುವರೋ ಆ ಸತ್ತವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿತು; ಹೌದು, ಅವರು ತಮ್ಮ ಪ್ರಯಾಸಗಳಿಂದ ವಿಶ್ರಮಿಸಿಕೊಳ್ಳುವರು, ಅವರ ಕ್ರಿಯೆಗಳು ಅವರನ್ನು ಹಿಂಬಾಲಿಸುತ್ತವೆ ಎಂದು ಆತ

14:14b.REV.014.014 ಆಗ ಒಂದು ಬಿಳೀ ಮೇಘವನ್ನೂ ಆ ಮೇಘದ ಮೇಲೆ ಮನುಷ್ಯ ಕುಮಾರನಂತಿದ್ದ ಒಬ್ಬಾತನು ಕೂತಿರುವುದನ್ನೂ ನಾನು ಕಂಡೆನು; ಆತನ ತಲೆಯ ಮೇಲೆ ಬಂಗಾರದ ಕಿರೀಟವಿತ್ತು; ಆತನ ಕೈಯಲ್ಲಿ ಹದವಾದ ಕುಡುಗೋಲು ಇತ್ತು.

14:15b.REV.014.015 ಆಗ ಮತ್ತೊಬ್ಬ ದೂತನು ಆಲಯದೊಳಗಿಂದ ಬಂದು ಮೇಘದ ಮೇಲೆ ಕೂತಿದ್ದಾತನಿಗೆ--ನಿನಗೆ ಕೊಯ್ಯುವ ಕಾಲ ಬಂದಿರುವದರಿಂದ ನಿನ್ನ ಕುಡುಗೋಲನ್ನು ಹಾಕಿ ಕೊಯ್ಯಿ; ಯಾಕಂದರೆ ಭೂಮಿಯ ಪೈರು ಮಾಗಿದೆ ಎಂದು ಮಹಾಶಬ್ದದಿಂದ ಕೂಗಿದನು.

14:16b.REV.014.016 ಮೇಘದ ಮೇಲೆ ಕೂತಿದ್ದಾತನು ತನ್ನ ಕುಡುಗೋಲನ್ನು ಭೂಮಿಯ ಮೇಲೆ ಹಾಕಿದನು; ಆಗ ಭೂಮಿಯ ಪೈರು ಕೊಯ್ಯಲ್ಪಟ್ಟಿತು.

14:17b.REV.014.017 ಮತ್ತೊಬ್ಬ ದೂತನು ಪರಲೋಕದಲ್ಲಿರುವ ದೇವಾಲಯದೊಳಗಿಂದ ಬಂದನು; ಅವನಲ್ಲಿಯೂ ಹದವಾದ ಕುಡುಗೋಲು ಇತ್ತು.

14:18b.REV.014.018 ಬೆಂಕಿಯ ಮೇಲೆ ಅಧಿಕಾರವಿದ್ದ ಇನ್ನೊಬ್ಬ ದೂತನು ಯಜ್ಞವೇದಿಯ ಬಳಿಯಿಂದ ಬಂದು ಆ ಹದವಾದ ಕುಡುಗೋಲು ಇದ್ದವನಿಗೆ--ನಿನ್ನ ಹದವಾದ ಕುಡುಗೋಲನ್ನು ಹಾಕಿ ಭೂಮಿಯ ದ್ರಾಕ್ಷೇ ಗೊಂಚಲುಗಳನ್ನು ಕೂಡಿಸು; ಯಾಕಂದರೆ ಅದರ ಹಣ್ಣುಗಳು ಪೂರಾ ಮಾಗಿವೆ ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.

14:19b.REV.014.019 ಆಗ ಆ ದೂತನು ತನ್ನ ಕುಡುಗೋಲನ್ನು ಭೂಮಿಗೆ ಹಾಕಿ ಭೂಮಿಯ ದ್ರಾಕ್ಷೇಹಣ್ಣನ್ನು ಕೂಡಿಸಿ ದೇವರ ರೌದ್ರದ ದೊಡ್ಡ ದ್ರಾಕ್ಷೇತೊಟ್ಟಿಯಲ್ಲಿ ಹಾಕಿದನು.ಆ ದ್ರಾಕ್ಷೇ ತೊಟ್ಟಿಯನ್ನು ಪಟ್ಟಣದ ಹೊರಗೆ ತುಳಿದರು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಇನ್ನೂರು ಮೈಲಿ ದೂರ ಹರಿಯಿತು.

14:20b.REV.014.020 ಆ ದ್ರಾಕ್ಷೇ ತೊಟ್ಟಿಯನ್ನು ಪಟ್ಟಣದ ಹೊರಗೆ ತುಳಿದರು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಇನ್ನೂರು ಮೈಲಿ ದೂರ ಹರಿಯಿತು.

15

15:1b.REV.015.001 ಪರಲೋಕದಲ್ಲಿ ದೊಡ್ಡ ಅದ್ಭುತಕರವಾದ ಮತ್ತೊಂದು ಗುರುತನ್ನು ನಾನು ನೋಡಿ ದೆನು. ಏಳು ಮಂದಿ ದೂತರಲ್ಲಿ ಏಳು ಕಡೇ ಉಪದ್ರವ ಗಳಿದ್ದವು; ಯಾಕಂದರೆ ಅವುಗಳಲ್ಲಿ ದೇವರ ರೌದ್ರವು ತುಂಬಿದೆ.

15:2b.REV.015.002 ಬೆಂಕಿ ಬೆರೆತ ಒಂದು ಗಾಜಿನ ಸಮುದ್ರವೋ ಎಂಬಂತೆ ನನಗೆ ಕಾಣಿಸಿತು; ಆಗ ಮೃಗದ ಮೇಲೆಯೂ ಅದರ ವಿಗ್ರಹದ ಮೇಲೆಯೂ ಅದರ ಮುದ್ರೆಯ ಮೇಲೆಯೂ ಅದರ ಹೆಸರಿನ ಅಂಕೆಯ ಮೇಲೆಯೂ ಜಯ ಹೊಂದಿದವರು ದೇವರ ವೀಣೆಗಳನ್ನು ಹಿಡು ಕೊಂಡು ಗಾಜಿನ ಸಮುದ್ರದ ಮೇಲೆ ನಿಂತಿರುವದನು

15:3b.REV.015.003 ಅವರು ದೇವರ ಸೇವಕನಾದ ಮೋಶೆಯ ಹಾಡನ್ನೂ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ--ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ಕ್ರಿಯೆಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಪರಿಶುದ್ಧರ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.

15:4b.REV.015.004 ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.

15:5b.REV.015.005 ಇದಾದ ಮೇಲೆ ನಾನು ನೋಡಿದಾಗ ಇಗೋ, ಪರಲೋಕದಲ್ಲಿರುವ ಸಾಕ್ಷೀ ಗುಡಾರದ ಆಲಯವು ತೆರೆಯಲ್ಪಟ್ಟಿತು.

15:6b.REV.015.006 ಇದಾದ ಮೇಲೆ ನಾನು ನೋಡಿದಾಗ ಇಗೋ, ಪರಲೋಕದಲ್ಲಿರುವ ಸಾಕ್ಷೀ ಗುಡಾರದ ಆಲಯವು ತೆರೆಯಲ್ಪಟ್ಟಿತು.

15:7b.REV.015.007 ದೇವರ ಮಹಿಮೆ ಯಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆ ಯಿಂದ ಆಲಯವು ತುಂಬಿದ ಕಾರಣ ಆ ಏಳುಮಂದಿ ದೂತರ ಏಳು ಉಪದ್ರವಗಳು ತೀರುವ ತನಕ ಆ ಆಲಯದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲ.ದೇವರ ಮಹಿಮೆ ಯಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆ ಯಿಂದ ಆಲಯವು ತುಂಬಿದ ಕಾರಣ ಆ ಏಳುಮಂದಿ ದೂತರ ಏಳು ಉಪದ್ರವಗಳು ತೀರುವ ತನಕ ಆ ಆಲಯದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲ.

15:8b.REV.015.008 ದೇವರ ಮಹಿಮೆ ಯಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆ ಯಿಂದ ಆಲಯವು ತುಂಬಿದ ಕಾರಣ ಆ ಏಳುಮಂದಿ ದೂತರ ಏಳು ಉಪದ್ರವಗಳು ತೀರುವ ತನಕ ಆ ಆಲಯದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲ.

16

16:1b.REV.016.001 ಆಗ ಆಲಯದಿಂದ ಬಂದ ಮಹಾಶಬ್ದ ವನ್ನು ಕೇಳಿದೆನು. ಅದು ಆ ಏಳು ಮಂದಿ ದೂತರಿಗೆ--ನೀವು ಹೋಗಿ ಆ ಪಾತ್ರೆಗಳ ಲ್ಲಿರುವ ದೇವರ ರೌದ್ರವನ್ನು ಭೂಮಿಯ ಮೇಲೆ ಹೊಯ್ಯಿರಿ ಎಂದು ಹೇಳಿತು.

16:2b.REV.016.002 ಆಗ ಮೊದಲನೆಯವನು ಹೊರಟು ತನ್ನ ಪಾತ್ರೆ ಯಲ್ಲಿದ್ದದ್ದನ್ನು ಭೂಮಿಯ ಮೇಲೆ ಹೊಯಿದನು; ಆಗ ಮೃಗದ ಗುರುತನ್ನು ಹೊಂದಿ ಅದರ ವಿಗ್ರಹಕ್ಕೆ ಆರಾಧನೆ ಮಾಡಿದ ಮನುಷ್ಯರ ಮೇಲೆ ಕೊಳೆಯುವ ಘೋರವಾದ ಹುಣ್ಣು ಎದ್ದಿತು.

16:3b.REV.016.003 ಎರಡನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಸಮುದ್ರದ ಮೇಲೆ ಹೊಯಿದಾಗ ಅದು ಸತ್ತವನ ರಕ್ತದ ಹಾಗಾಯಿತು; ಸಮುದ್ರದಲ್ಲಿ ಬದುಕುವ ಪ್ರತಿಯೊಂದು ಪ್ರಾಣಿಯು ಸತ್ತಿತು.

16:4b.REV.016.004 ಮೂರನೆಯ ದೂತನು ತನ್ನ ಪಾತ್ರೆಯಲ್ಲಿ ದ್ದದ್ದನ್ನು ನದಿಗಳ ಮೇಲೆಯೂ ನೀರಿನ ಬುಗ್ಗೆಗಳ ಮೇಲೆಯೂ ಹೊಯಿದನು; ಅವುಗಳ ನೀರು ರಕ್ತವಾಯಿತು.

16:5b.REV.016.005 ಅಮೇಲೆ ಜಲಗಳ ದೂತನು--ಓ ಕರ್ತನೇ, ನೀನು ಇರುವಾತನೂ ಇದ್ದಾತನೂ ಬರುವಾತನೂ ಆಗಿರುವದರಿಂದ ನೀನು ಹೀಗೆ ತೀರ್ಪು ಮಾಡಿದ್ದರಲ್ಲಿ ನೀತಿ ಸ್ವರೂಪನಾಗಿದ್ದೀ.

16:6b.REV.016.006 ಅವರು ಪರಿಶುದ್ಧರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ;ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ನಾನು ಕೇಳಿದೆನು.

16:7b.REV.016.007 ಆಮೇಲೆ ಯಜ್ಞವೇದಿಯೊಳಗಿಂದ ಮತ್ತೊಬ್ಬನು--ಹೌದು, ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ ಎಂದು ಹೇಳುವದನ್ನು ನಾನು ಕೇಳಿದೆನು.

16:8b.REV.016.008 ನಾಲ್ಕನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಸೂರ್ಯನ ಮೇಲೆ ಹೊಯಿದನು. ಆಗ ಸೂರ್ಯ ನಿಗೆ ಬೆಂಕಿಯಿಂದ ಮನುಷ್ಯರನ್ನು ಕಂದಿಸುವ ಶಕ್ತಿಯು ಕೊಡಲ್ಪಟ್ಟಿತು.

16:9b.REV.016.009 ಮನುಷ್ಯರು ಬಲವಾದ ಕಾವಿನಿಂದ ಕಂದಿಹೋದರೂ ಅವರು ದೇವರನ್ನು ಘನಪಡಿಸುವ ಹಾಗೆ ಮಾನಸಾಂತರ ಮಾಡಿಕೊಳ್ಳದೆ ಈ ಉಪದ್ರವ ಗಳ ಮೇಲೆ ಅಧಿಕಾರವುಳ್ಳ ದೇವರ ನಾಮವನ್ನು ದೂಷಿಸಿದರು.

16:10b.REV.016.010 ಐದನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಮೃಗದ ಆಸನದ ಮೇಲೆ ಹೊಯ್ಯಲು ಅದರ ರಾಜ್ಯವು ತುಂಬಾ ಕತ್ತಲಾಯಿತು; ಜನರು ತಮಗಾದ ನೋವಿನ ದೆಸೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು

16:11b.REV.016.011 ತಮ್ಮ ಕೃತ್ಯಗಳ ವಿಷಯದಲ್ಲಿ ಮಾನಸಾಂತರ ಮಾಡಿ ಕೊಳ್ಳದೆ ತಮ್ಮ ನೋವಿನ ದೆಸೆಯಿಂದಲೂ ಹುಣ್ಣುಗಳ ದೆಸೆಯಿಂದಲೂ ಪರಲೋಕದೇವರನ್ನು ದೂಷಿಸಿದರು.

16:12b.REV.016.012 ಆರನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಯೂಫ್ರೇಟೀಸ್‌ ಮಹಾನದಿಯ ಮೇಲೆ ಹೊಯ್ಯಲು ಮೂಡಣ ದಿಕ್ಕಿನಿಂದ ಬರುವ ರಾಜರಿಗೆ ಮಾರ್ಗವು ಸಿದ್ಧವಾಗುವಂತೆ ಅದರ ನೀರು ಬತ್ತಿ ಹೋಯಿತು.

16:13b.REV.016.013 ಘಟಸರ್ಪದ ಬಾಯಿಂದಲೂ ಮೃಗದ ಬಾಯಿಂ ದಲೂ ಸುಳ್ಳು ಪ್ರವಾದಿಯ ಬಾಯಿಂದಲೂ ಕಪ್ಪೆಗಳಂ ತಿದ್ದ ಮೂರು ಅಶುದ್ಧಾತ್ಮಗಳು ಹೊರಗೆ ಬರುವದನ್ನು ನಾನು ಕಂಡೆನು.

16:14b.REV.016.014 ಅವು ಮಹತ್ಕಾರ್ಯಗಳನ್ನು ಮಾಡುವ ದೆವ್ವಗಳ ಆತ್ಮಗಳೇ; ಸರ್ವಶಕ್ತನಾದ ದೇವರ ಮಹಾ ದಿನದಲ್ಲಾಗುವ ಯುದ್ಧಕ್ಕೆ ಭೂಲೋಕದ ಮತ್ತು ಪ್ರಪಂಚದ ಎಲ್ಲಾ ರಾಜರನ್ನು ಕೂಡಿಸುವದಕ್ಕಾಗಿ ಅವರ ಬಳಿಗೆ ಹೋಗುವವು.

16:15b.REV.016.015 ಇಗೋ, ಕಳ್ಳನು ಬರುವಂತೆ ನಾನು ಬರುತ್ತೇನೆ. ನಿರ್ವಾಣನಾಗಿ ತಿರುಗಾಡುವಾಗ ಜನರು ತನ್ನ ನಾಚಿಕೆಯನ್ನು ನೋಡಿಯಾರೆಂದು ಎಚ್ಚರ ವಾಗಿದ್ದು ತನ್ನ ವಸ್ತ್ರಗಳನ್ನು ಕಾಪಾಡಿಕೊಳ್ಳುವವನು ಧನ್ಯನು.

16:16b.REV.016.016 ಅವನು ಅವರನ್ನು ಇಬ್ರಿಯ ಭಾಷೆಯಲ್ಲಿ ಹರ್ಮಗೆದೋನ್‌ ಎಂದು ಕರೆಯಲ್ಪಟ್ಟ ಸ್ಥಳಕ್ಕೆ ಕೂಡಿಸುವನು.

16:17b.REV.016.017 ಏಳನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ವಾಯುಮಂಡಲದಲ್ಲಿ ಹೊಯ್ಯಲು ಪರಲೋಕದಲ್ಲಿದ್ದ ಆಲಯದೊಳಗಿಂದಲೂ ಸಿಂಹಾಸನದಿಂದಲೂ ಮಹಾಶಬ್ದವು ಬಂದು--ಮುಗಿಯಿತು ಎಂದು ಹೇಳಿತು.

16:18b.REV.016.018 ಆಗ ವಾಣಿಗಳೂ ಗುಡುಗುಗಳೂ ಮಿಂಚುಗಳೂ ಉಂಟಾದವು; ಇದಲ್ಲದೆ ಮಹಾ ಭೂಕಂಪವುಂಟಾಯಿತು; ಮನುಷ್ಯರು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ಬಲವಾದ ಮತ್ತು ದೊಡ್ಡ ದಾದ ಭೂಕಂಪವಾಗಿರಲಿಲ್ಲ.

16:19b.REV.016.019 ಆ ಮಹಾಪಟ್ಟಣವು ಮೂರು ಭಾಗಗಳಾಗಿ ವಿಭಾಗವಾಯಿತು; ಜನಾಂಗಗಳ ಪಟ್ಟಣಗಳು ಬಿದ್ದವು; ಇದಲ್ಲದೆ ಮಹಾಬಾಬೆಲಿಗೆ ಉಗ್ರಕೋಪವೆಂಬ ದ್ರಾಕ್ಷಾರಸದ ಪಾತ್ರೆಯನ್ನು ಕೊಡು ವಂತೆ ದೇವರ ಮುಂದೆ ಅದು ಜ್ಞಾಪಕಕ್ಕೆ ಬಂತು.

16:20b.REV.016.020 ಆಗ ದ್ವೀಪಗಳೆಲ್ಲಾ ಓಡಿಹೋದವು; ಬೆಟ್ಟಗಳು ಸಿಕ್ಕದೆ ಹೋದವು.ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಅನೇ ಕಲ್ಲುಗಳು ಸುರಿದವು; ಒಂದೊಂದು ಕಲ್ಲು ಹೆಚ್ಚು ಕಡಿಮೆ ನಾಲ್ಕು ಮಣ ತೂಕವಾಗಿತ್ತು; ಆ ಆನೆಕಲ್ಲುಗಳ ಉಪದ್ರವವು ಬಹಳ ಅತಿದೊಡ್ಡದಾಗಿ ದ್ದದರಿಂದ ಮನುಷ್ಯರು ದೇವರನ್ನು ದೂಷಿಸಿದರು.

16:21b.REV.016.021 ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಅನೇ ಕಲ್ಲುಗಳು ಸುರಿದವು; ಒಂದೊಂದು ಕಲ್ಲು ಹೆಚ್ಚು ಕಡಿಮೆ ನಾಲ್ಕು ಮಣ ತೂಕವಾಗಿತ್ತು; ಆ ಆನೆಕಲ್ಲುಗಳ ಉಪದ್ರವವು ಬಹಳ ಅತಿದೊಡ್ಡದಾಗಿ ದ್ದದರಿಂದ ಮನುಷ್ಯರು ದೇವರನ್ನು ದೂಷಿಸಿದರು.

17

17:1b.REV.017.001 ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿ--ಇಲ್ಲಿಗೆ ಬಾ, ಬಹಳ ನೀರುಗಳ ಮೇಲೆ ಕೂತಿರುವ ಮಹಾ ಜಾರಸ್ತ್ರೀಗೆ ಬರುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ.

17:2b.REV.017.002 ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು. ಭೂನಿವಾಸಿಗಳು ಅವಳ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು ಎಂದು ಹೇಳಿದನು.

17:3b.REV.017.003 ಆಗ ಅವನು ಆತ್ಮದಲ್ಲಿ ನನ್ನನ್ನು ಎತ್ತಿಕೊಂಡು ಅಡವಿಗೆ ಹೋದನು; ಅಲ್ಲಿ ದೇವದೂಷಣೆಯ ಹೆಸರುಗಳಿಂದ ತುಂಬಿದ್ದು ಏಳು ತಲೆಗಳು ಹತ್ತು ಕೊಂಬುಗಳೂ ಇದ್ದ ಕೆಂಪುಬಣ್ಣದ ಮೃಗದ ಮೇಲೆ ಕೂತಿದ್ದ ಒಬ್ಬ ಸ್ತ್ರೀಯನ್ನು ನಾನು ಕಂಡೆನು.

17:4b.REV.017.004 ಆ ಸ್ತ್ರೀಯು ಧೂಮ್ರ ಮತ್ತು ಕೆಂಪುವರ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮತ್ತು ಮುತ್ತುಗಳು ಇವುಗಳಿಂದ ಅಲಂಕರಿಸಿಕೊಂಡಿದ್ದಳು; ಅವಳ ಕೈಯಲ್ಲಿ ಒಂದು ಚಿನ್ನದ ಬಟ್ಟಲು ಇತ್ತು; ಅದು ಅವಳ ಜಾರತ್ವದ ಅಸಹ್ಯವಾದವುಗಳಿಂದಲೂ ಅಶುದ್ಧತ್ವದಿಂದಲೂ ತುಂಬಿತು

17:5b.REV.017.005 ಇದಲ್ಲದೆ ಮರ್ಮ, ಮಹಾ ಬಾಬೆಲು, ಭೂಮಿಯಲ್ಲಿರುವ ಜಾರಸ್ತ್ರೀಯರಿಗೂ ಅಸಹ್ಯವಾದ ವುಗಳಿಗೂ ತಾಯಿ ಎಂಬ ಹೆಸರು ಅವಳ ಹಣೆಯ ಮೇಲೆ ಬರೆದಿತ್ತು.

17:6b.REV.017.006 ಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕ

17:7b.REV.017.007 ಆಗ ಆ ದೂತನು ನನಗೆ--ನೀನೇಕೆ ಆಶ್ಚರ್ಯಪಟ್ಟೆ? ಆ ಸ್ತ್ರೀಯ ವಿಷಯವಾಗಿಯೂ ಅವಳನ್ನು ಹೊತ್ತುಕೊಂಡಿದ್ದ ಏಳು ತಲೆಗಳು ಮತ್ತು ಹತ್ತು ಕೊಂಬುಗಳುಳ್ಳ ಮೃಗದ ವಿಷಯವಾಗಿಯೂ ಇರುವ ಮರ್ಮವನ್ನು ನಾನು ನಿನಗೆ ತಿಳಿಸುತ್ತೇನೆ.

17:8b.REV.017.008 ನೀನು ಕಂಡ ಈ ಮೃಗವು ಮೊದಲು ಇತ್ತು. ಈಗ ಇಲ್ಲ, ಅದು ತಳವಿಲ್ಲದ ತಗ್ಗಿನಿಂದ ಏರಿ ಬಂದು ನಾಶನಕ್ಕೆ ಹೋಗುವದು. ಭೂಮಿಯಲ್ಲಿ ವಾಸಿಸುವವರೊಳಗೆ ಯಾರಾರ ಹೆಸರು ಗಳು ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಜೀವಗ್ರಂಥ ದಲ್ಲಿ ಬರೆದಿರುವದಿಲ್ಲವೋ ಅವರು ಮೊದಲು ಇದ್ದು ಈಗ ಇಲ್ಲದ ಇನ್ನು

17:9b.REV.017.009 ಇದರಲ್ಲಿ ಜ್ಞಾನವುಳ್ಳ ಮನಸ್ಸು ಇರುತ್ತದೆ. ಆ ಏಳು ತಲೆಗಳು ಆ ಸ್ತ್ರೀ ಕೂತು ಕೊಂಡಿರುವ ಏಳು ಬೆಟ್ಟಗಳೇ.

17:10b.REV.017.010 ಇದಲ್ಲದೆ ಅವು ಏಳು ಮಂದಿ ರಾಜರು; ಐದು ಮಂದಿ ಬಿದ್ದು ಹೋಗಿದ್ದಾರೆ. ಒಬ್ಬನು ಇದ್ದಾನೆ, ಮತ್ತೊಬ್ಬನು ಇನ್ನೂ ಬಂದಿಲ್ಲ. ಬಂದ ಮೇಲೆ ಅವನು ಸ್ವಲ್ಪಕಾಲ ಇರಲೇ ಬೇಕು.

17:11b.REV.017.011 ಮೊದಲಿದ್ದು ಈಗ ಇಲ್ಲದಿರುವ ಆ ಮೃಗವು ತಾನೇ ಎಂಟನೆಯವನು; ಅವನು ಆ ಏಳು ಮಂದಿಗೆ ಸೇರಿದವನಾಗಿದ್ದು ನಾಶನಕ್ಕೆ ಹೋಗುತ್ತಾನೆ.

17:12b.REV.017.012 ನೀನು ಕಂಡ ಆ ಹತ್ತು ಕೊಂಬುಗಳು ರಾಜ್ಯವನ್ನು ಇನ್ನೂ ಹೊಂದದಿರುವ ಹತ್ತು ಮಂದಿ ರಾಜರು. ಅವರು ಮೃಗದೊಂದಿಗೆ ರಾಜರಂತೆ ಒಂದು ತಾಸಿನವರೆಗೆ ಅಧಿಕಾರವನ್ನು ಹೊಂದುತ್ತಾರೆ.

17:13b.REV.017.013 ಅವರು ಒಂದೇ ಮನಸ್ಸುಳ್ಳವರಾಗಿದ್ದು ತಮ್ಮ ಅಧಿಕಾರವನ್ನೂ ಶಕ್ತಿಯನ್ನೂ ಮೃಗಕ್ಕೆ ಕೊಡುತ್ತಾರೆ.

17:14b.REV.017.014 ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ.

17:15b.REV.017.015 ಅವನು ನನಗೆ--ನೀನು ಕಂಡ ಆ ಜಾರಸ್ತ್ರೀಯು ಕೂತುಕೊಂಡಿರುವ ನೀರುಗಳು ಅಂದರೆ ಪ್ರಜೆಗಳೂ ಸಮೂಹಗಳೂ ಜನಾಂಗಗಳೂ ಭಾಷೆಗಳೂ ಆಗಿವೆ.

17:16b.REV.017.016 ಮೃಗದ ಮೇಲೆ ನೀನು ನೋಡಿದ ಹತ್ತು ಕೊಂಬು ಗಳು ಆ ಜಾರ ಸ್ತ್ರೀಯನ್ನು ದ್ವೇಷಿಸಿ ಅವಳನ್ನು ಗತಿಗೆಟ್ಟ ವಳನ್ನಾಗಿಯೂ ಬಟ್ಟೆಯಿಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು ಅವಳನ್ನು ಬೆಂಕಿಯಿಂದ ಸುಟ್ಟುಬಿಡುವವು.

17:17b.REV.017.017 ಯಾಕಂದರೆ ಅವರು ದೇವರ ಚಿತ್ತವನ್ನು ನೆರವೇರಿಸುವದಕ್ಕೆ ಒಂದೇ ಅಭಿಪ್ರಾಯವುಳ್ಳವರಾಗಿದ್ದು ತಮ್ಮ ರಾಜ್ಯವನ್ನು ಮೃಗಕ್ಕೆ ಕೊಡುವಂತೆ ದೇವರು ತನ್ನ ವಾಕ್ಯಗಳು ನೆರವೇರುವ ತನಕ ಅವರ ಹೃದಯಗಳನ್ನು ಪ್ರೇರೇಪಿಸಿದನು.ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಆಳುತ್ತಿರುವ ಮಹಾನಗರಿಯೇ ಎಂದು ಹೇಳಿದನು.

17:18b.REV.017.018 ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಆಳುತ್ತಿರುವ ಮಹಾನಗರಿಯೇ ಎಂದು ಹೇಳಿದನು.

18

18:1b.REV.018.001 ಇವುಗಳಾದ ಮೇಲೆ ಮಹಾ ಅಧಿಕಾರವುಳ್ಳ ಮತ್ತೊಬ್ಬ ದೂತನು ಪರಲೋಕದಿಂದ ಇಳಿಯುವದನ್ನು ಕಂಡೆನು; ಅವನ ಪ್ರಭಾವದಿಂದ ಭೂಮಿಗೆ ಪ್ರಕಾಶವುಂಟಾಯಿತು.

18:2b.REV.018.002 ಅವನು ಗಟ್ಟಿ ಯಾದ ಶಬ್ದದಿಂದ ಕೂಗುತ್ತಾ--ಮಹಾಬಾಬೆಲ್‌ ಬಿದ್ದಳು, ಬಿದ್ದಳು; ದೆವ್ವಗಳ ವಾಸಸ್ಥಾನವೂ ಅಶುದ್ಧಾತ್ಮಗಳ ಆಶ್ರಯವೂ ಅಪವಿತ್ರವಾಗಿಯೂ ಅಸಹ್ಯವಾಗಿಯೂ ಇರುವ ಸಕಲ ವಿಧವಾದ ಪಕ್ಷಿಗಳ ಪಂಜರವೂ ಆದಳು.

18:3b.REV.018.003 ಎಲ್ಲಾ ಜನಾಂಗಗಳು ಅವಳ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು; ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು; ಅವಳ ಅತಿಶಯವಾದ ವೈಭವದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು ಎಂದು ಹೇಳಿದನು.

18:4b.REV.018.004 ಪರಲೋಕದಿಂದ ಮತ್ತೊಂದು ಶಬ್ದವನ್ನು ನಾನು ಕೇಳಿದೆನು; ಅದು--ನನ್ನ ಜನರೇ, ಅವಳಿಂದ ಹೊರಗೆ ಬನ್ನಿರಿ; ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗ ಬಾರದು; ಅವಳಿಗಾಗುವ ಉಪದ್ರವಗಳಿಗೆ ಗುರಿ ಯಾಗಬಾರದು.

18:5b.REV.018.005 ಅವಳ ಪಾಪಗಳು ಆಕಾಶದ ವರೆಗೂ ಮುಟ್ಟಿವೆ. ದೇವರು ಅವಳ ದ್ರೋಹಗಳನ್ನು ಜ್ಞಾಪಿಸಿಕೊಂಡಿದ್ದಾನೆ.

18:6b.REV.018.006 ನಿಮಗೆ ಅವಳು ಮಾಡಿದ ಪ್ರಕಾರ ನೀವು ಅವಳಿಗೆ ಪ್ರತೀಕಾರ ಮಾಡಿರಿ; ಅವಳ ಕೃತ್ಯಗಳಿಗೆ ಸರಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ. ಅವಳು ತುಂಬಿಸಿದ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ತುಂಬಿಸಿರಿ.

18:7b.REV.018.007 ಅವಳು ಎಷ್ಟರಮಟ್ಟಿಗೆ ತನ್ನನ್ನು ಘನಪಡಿಸಿ ಕೊಂಡು ವೈಭವದಲ್ಲಿ ಜೀವಿಸಿದ್ದಳೋ ಅಷ್ಟರಮಟ್ಟಿಗೆ ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ; ಯಾಕಂದರೆ ಅವಳು ತನ್ನ ಹೃದಯದಲ್ಲಿ--ನಾನು ರಾಣಿ ಯಾಗಿ ಕೂತುಕೊಂಡಿದ್ದೇನೆ, ನಾನು ವಿಧವೆಯಲ್ಲ, ದುಃಖವನ್ನು ಕಾಣುವದೇ ಇಲ್ಲ ಎಂದು ಹೇಳಿಕೊಳ್ಳು

18:8b.REV.018.008 ಆದದರಿಂದ ಅವಳಿಗೆ ಮರಣ ದುಃಖ ಕ್ಷಾಮ ಎಂಬೀ ಉಪದ್ರವಗಳು ಒಂದೇ ದಿನದಲ್ಲಿ ಸಂಭವಿ ಸುವವು; ಅವಳು ಬೆಂಕಿಯಿಂದ ಸಂಪೂರ್ಣವಾಗಿ ಸುಟ್ಟುಹೋಗುವಳು. ಅವಳಿಗೆ ದಂಡನೆಯನ್ನು ವಿಧಿಸಿದ ದೇವರಾಗಿರುವ ಕರ್ತನು ಬಲಿಷ್ಠನಾಗಿದ್ದಾನೆ.

18:9b.REV.018.009 ಅವಳೊಂದಿಗೆ ಜಾರತ್ವ ಮಾಡಿ ವೈಭವದಲ್ಲಿ ಬದುಕಿದ ಭೂರಾಜರು ಅವಳ ದಹನದ ಹೊಗೆಯನ್ನು ನೋಡು ವಾಗ ಅವಳಿಗಾಗಿ ಗೋಳಾಡುತ್ತಾ ಪ್ರಲಾಪಿಸುವರು.

18:10b.REV.018.010 ಅವರು ದೂರದಲ್ಲಿ ನಿಂತು ಅವಳಿಗುಂಟಾದ ಯಾತ ನೆಯ ಭಯದಿಂದ--ಅಯ್ಯೋ, ಅಯ್ಯೋ, ಆ ಮಹಾಪಟ್ಟಣವಾದ ಬಾಬೆಲೇ, ಬಲಿಷ್ಠವಾದ ನಗ ರಿಯೇ, ಒಂದೇ ಗಳಿಗೆಯಲ್ಲಿ ನಿನಗೆ ತೀರ್ಪಾಯಿತಲ್ಲಾ ಎಂದು ಹೇಳುವರು.

18:11b.REV.018.011 ಇದಲ್ಲದೆ ಭೂಲೋಕದ ವರ್ತಕರು ಅವಳ ನಿಮಿತ್ತವಾಗಿ ಅತ್ತು ಗೋಳಾಡುವರು. ಯಾಕಂದರೆ ಅವರ ಸರಕುಗಳನ್ನು ಅಂದರೆ

18:12b.REV.018.012 ಚಿನ್ನ, ಬೆಳ್ಳಿ, ಅಮೂಲ್ಯವಾದ ಕಲ್ಲುಗಳು, ಮುತ್ತುಗಳು, ನಯವಾದ ನಾರುಮಡಿ, ಧೂಮ್ರವರ್ಣದ ವಸ್ತ್ರ, ರೇಶ್ಮೆ, ರಕ್ತಾಂಬರ, ಸಕಲ ವಿಧವಾದ ಅಗಿಲುಮರ, ಸಕಲ ವಿಧವಾದ ದಂತದ ಪಾತ್ರೆಗಳು, ಬಹು ಅಮೂಲ್ಯವಾದ ಮರ, ಹಿತ್ತಾಳೆ, ಸಕಲ ವಿಧವಾದ ಪಾತ್ರೆಗಳು, ಕಬ್ಬಿಣ, ಚಂದ್ರಕಾಂತ,

18:13b.REV.018.013 ಲವಂಗ, ಚೆಕ್ಕೆ, ಧೂಪ, ಸುಗಂಧ ತೈಲ, ಸಾಂಬ್ರಾಣಿ, ದ್ರಾಕ್ಷಾರಸ, ಎಣ್ಣೆ, ನಯವಾದಹಿಟ್ಟು, ಗೋಧಿ, ದನಗಳು, ಕುರಿ ಗಳು, ಕುದುರೆಗಳು, ರಥಗಳು, ಗುಲಾಮರು, ಮನುಷ್ಯರ ಪ್ರಾಣಗಳು ಇವೇ ಮೊದಲಾದವುಗಳನ್ನು ಯಾರೂ ಎಂದೂ ಕೊಂಡುಕೊಳ್ಳುವರಿಲ್ಲ ಎಂದು ದುಃಖಿಸುವರು.

18:14b.REV.018.014 ನಿನ್ನ ಜೀವವು ಅಪೇಕ್ಷಿಸಿದ ಹಣ್ಣು ಗಳು ನಿನ್ನನ್ನು ಬಿಟ್ಟು ಹೋದವು; ಸೊಗಸಾಗಿಯೂ ಶೋಭಾಯಮಾನವಾಗಿಯೂ ಇರುವವುಗಳೆಲ್ಲವೂ ನಿನ್ನನ್ನು ಬಿಟ್ಟು ಹೋದವು. ಅವು ಇನ್ನು ಮೇಲೆ ನಿನಗೆ ಸಿಕ್ಕುವದೇ ಇಲ್ಲ.

18:15b.REV.018.015 ಅವಳಿಂದ ಐಶ್ವರ್ಯವಂತ ರಾದ ಈ ಸರಕುಗಳ ವರ್ತಕರು ಅವಳ ಯಾತನೆಗೆ ಭಯಪಟ್ಟು ದೂರದಲ್ಲಿ ನಿಂತು ಅಳುತ್ತಾ ಗೋಳಾ ಡುತ್ತಾ--

18:16b.REV.018.016 ಅಯ್ಯೋ, ಅಯ್ಯೋ, ಮಹಾನಗರಿಯೇ, ನಯವಾದ ನಾರುಮಡಿಯನ್ನೂ ಧೂಮ್ರವರ್ಣದ ವಸ್ತ್ರವನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮುತ್ತುಗಳು ಇವುಗಳಿಂದ ಅಲಂಕರಿಸಲ್ಪಟ್ಟವಳೇ,

18:17b.REV.018.017 ಅಷ್ಟು ದೊಡ್ಡ ಐಶ್ವರ್ಯವು ಒಂದೇ ಗಳಿಗೆಯಲ್ಲಿ ಇಲ್ಲದೆ ಹೋಯಿತಲ್ಲಾ ಅನ್ನುವರು. ಇದಲ್ಲದೆ ಹಡಗುಗಳ ಯಜಮಾನರೂ ಹಡಗುಗಳಲ್ಲಿ ಜೊತೆಯಾಗಿರುವವರೂ ನಾವಿಕರೂ ಸಮುದ್ರದ ಮೇಲೆ ವ್ಯಾಪಾರ ಮಾಡುವವರೆಲ್ಲರೂ ದೂರದಲ್ಲಿ ನಿಂತು

18:18b.REV.018.018 ಅವಳ ದಹನದ ಹೊಗೆಯನ್ನು ನೋಡುತ್ತಾ--ಈ ಮಹಾ ಪಟ್ಟಣಕ್ಕೆ ಸಮಾನವಾದ ಪಟ್ಟಣವು ಯಾವದು ಎಂದು ಕೂಗಿ ಹೇಳಿದರು.

18:19b.REV.018.019 ಆಗ ಅವರು ತಮ್ಮ ತಲೆಗಳ ಮೇಲೆ ಧೂಳನು ಹೊಯಿದುಕೊಂಡು ಕೂಗುತ್ತಾ ಅಳುತ್ತಾ, ಗೋಳಾ ಡುತ್ತಾ--ಅಯ್ಯೋ, ಅಯ್ಯೋ ಸಮುದ್ರದ ಮೇಲೆ ಹಡಗುಗಳಿದ್ದವರೆಲ್ಲರನ್ನು ತನ್ನ ಅಮೂಲ್ಯ ದ್ರವ್ಯ ಗಳಿಂದ ಐಶ್ವರ್ಯವಂತರನ್ನಾಗಿ ಮಾಡಿದ ಆ ಮಹಾ ನಗರಿಯು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ ಎಂದು

18:20b.REV.018.020 ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು.

18:21b.REV.018.021 ಆಗ ಬಲಿಷ್ಠನಾದ ಒಬ್ಬ ದೂತನು ಬೀಸುವ ದೊಡ್ಡ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರ ದೊಳಗೆ ಹಾಕಿ--ಮಹಾ ಪಟ್ಟಣವಾದ ಆ ಬಾಬೆಲು ಹೀಗೆಯೇ ಬಲಾತ್ಕಾರದಿಂದ ಕೆಡವಲ್ಲಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ.

18:22b.REV.018.022 ನಿನ್ನಲ್ಲಿ ವೀಣೆಗಾರರೂ ವಾದ್ಯ ಗಾರರೂ ಕೊಳಲೂದುವವರೂ ತುತೂರಿಯವರು ಮಾಡುವ ಧ್ವನಿಯೂ ಇನ್ನೆಂದಿಗೂ ಕೇಳಿಸುವದಿಲ್ಲ. ಯಾವ ವಿಧವಾದ ಕೈಗಾರಿಕೆಯನ್ನು ಮಾಡುವವರು ನಿಮ್ಮಲ್ಲಿ ಇನ್ನೆಂದಿಗೂ ಸಿಕ್ಕುವದಿಲ್ಲ; ಬೀಸುವ ಕಲ್ಲಿನ ಶಬ್ದವೂ ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ.

18:23b.REV.018.023 ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸು ವದಿಲ್ಲ. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ; ನಿನ್ನ ವರ್ತಕರು ಭೂಮಿಯ ಪ್ರಧಾನ ರಾಗಿದ್ದದ್ದಲ್ಲದೆ ನಿನ್ನ ಮಾಟದಿಂದ ಎಲ್ಲಾ ಜನಾಂಗ ದವರು ಮೋಸ ಹೋದರು.ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.

18:24b.REV.018.024 ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.

19

19:1b.REV.019.001 ಇವುಗಳಾದ ಮೇಲೆ ಪರಲೋಕದಲ್ಲಿ ಬಹಳ ಜನರ ಮಹಾ ಶಬ್ದವನ್ನು ನಾನು ಕೇಳಿದೆನು; ಅವರು--ಹಲ್ಲೆಲೂಯಾ; ನಮ್ಮ ದೇವ ರಾದ ಕರ್ತನಿಗೆ ರಕ್ಷಣೆಯೂ ಮಹಿಮೆಯೂ ಘನವೂ ಅಧಿಕಾರವೂ ಉಂಟಾದವು.

19:2b.REV.019.002 ಆತನ ನ್ಯಾಯತೀರ್ಪು ಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ; ಯಾಕಂ ದರೆ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಆತನ ಸೇವಕರ ರಕ್ತಕ್ಕಾಗಿ ಅವಳಿಗೆ ಪ್ರತಿ ದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿದರು.

19:3b.REV.019.003 ತಿರಿಗಿ ಅವರು --ಹಲ್ಲೆಲೂಯಾ ಅಂದರು. ಅವಳ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರಿ ಹೋಗುತ್ತದೆ.

19:4b.REV.019.004 ಆಗ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ--ಆಮೆನ್‌. ಹಲ್ಲೆಲೂಯಾ ಎಂದು ಹೇಳುತ್ತಾ ಸಿಂಹಾಸನದ ಮೇಲೆ ಕೂತಿದ್ದ ದೇವರ ಮುಂದೆ ಅಡ್ಡಬಿದ್ದು ಆರಾಧಿಸಿದರು.

19:5b.REV.019.005 ಆಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಶಬ್ದವು--ದೇವರ ಸೇವಕರೆಲ್ಲರೇ, ಆತನಿಗೆ ಭಯ ಪಡುವ ಹಿರಿಕಿರಿಯರೇ, ನಮ್ಮ ದೇವರನ್ನು ಕೊಂಡಾಡಿರಿ ಎಂದು ಹೇಳಿತು.

19:6b.REV.019.006 ತರುವಾಯ ಜನರ ದೊಡ್ಡ ಗುಂಪಿನ ಶಬ್ದದಂತೆಯೂ ಬಹಳ ನೀರುಗಳ ಘೋಷದಂತೆಯೂ ಗಟ್ಟಿಯಾದ ಗುಡುಗುಗಳ ಶಬ್ದದಂತೆಯೂ ಇದ್ದ ಒಂದು ಶಬ್ದವನ್ನು ನಾನು ಕೇಳಿದೆನು; ಅದು--ಹಲ್ಲೆಲೂಯಾ, ಸರ್ವಶಕ್ತನಾಗಿರುವ ದೇವರಾದ ಕರ್ತನು ಆಳುತ್ತಾನೆ.

19:7b.REV.019.007 ಸಂತೋಷಪಡೋಣ, ಹರ್ಷಗೊಳ್ಳೋಣ, ಆತ ನನ್ನು ಘನಪಡಿಸೋಣ; ಯಾಕಂದರೆ ಕುರಿಮರಿಯಾದಾ ತನ ವಿವಾಹವು ಬಂತು; ಆತನಿಗೆ ವಿವಾಹವಾಗುವ ಕನ್ಯೆಯು ತನ್ನನ್ನು ಸಿದ್ಧಮಾಡಿಕೊಂಡಿದ್ದಾಳೆ ಎಂದು ಹೇಳಿತು.

19:8b.REV.019.008 ನಿರ್ಮಲವಾದ ಬಿಳೀ ನಯವಾದ ನಾರು ಮಡಿಯನ್ನು ಧರಿಸಿಕೊಳ್ಳುವದಕ್ಕೆ ಆಕೆಗೆ ಅನುಗ್ರಹಿ ಸೋಣವಾಗಿತ್ತು; ಯಾಕಂದರೆ ಆ ನಾರುಮಡಿಯು ಪರಿಶುದ್ಧರ ನೀತಿಯೇ.

19:9b.REV.019.009 ಇದಲ್ಲದೆ ಅವನು--ಕುರಿಮರಿ ಯಾದಾತನ ವಿವಾಹದ ಔತಣಕ್ಕೆ ಕರೆಯಲ್ಪಟ್ಟವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿದನು. ಇದಲ್ಲದೆ ಅವನು--ಇವುಗಳು ದೇವರ ನಿಜವಾದ ಮಾತುಗಳಾಗಿವೆ ಎಂದು ನನಗೆ ಹೇಳಿದನು.

19:10b.REV.019.010 ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮುಂದೆ ಬೀಳಲು ಅವನು--ನೀನು ಹಾಗೆ ಮಾಡಬೇಡ ನೋಡು, ನಾನು ನಿನಗೂ ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದ ನಿನ್ನ ಸಹೋದರ ರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೆ ಆರಾಧನೆ ಮಾಡು. ಯಾಕಂದರೆ ಯೇಸುವಿನ ವಿಷಯ

19:11b.REV.019.011 ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ;

19:12b.REV.019.012 ಆತನ ಕಣ್ಣುಗಳು ಬೆಂಕಿಯ ಉರಿಯಂತಿದ್ದವು; ಆತನ ತಲೆಯ ಮೇಲೆ ಅನೇಕ ಕಿರೀಟಗಳು ಇದ್ದವು. ಬರೆಯಲ್ಪಟ್ಟ ಹೆಸರು ಆತನಿಗೆ ಇತ್ತು. ಅದು ಆತನಿಗೇ ಹೊರತು ಮತ್ತಾರಿಗೂ ತಿಳಿದಿರಲಿಲ್ಲ.

19:13b.REV.019.013 ಆತನು ರಕ್ತದಲ್ಲಿ ಅದ್ದಿದ ವಸ್ತ್ರವನ್ನು ಧರಿಸಿ ಕೊಂಡಿದ್ದನು. ಆತನ ಹೆಸರು ದೇವರವಾಕ್ಯ ವೆಂದು ಕರೆಯಲ್ಪಡುತ್ತದೆ.

19:14b.REV.019.014 ಪರಲೋಕದಲ್ಲಿರುವ ಸೈನ್ಯಗಳು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಆತನ ಹಿಂದೆ ಬರುತ್ತಿದ್ದವು.

19:15b.REV.019.015 ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ.

19:16b.REV.019.016 ಆತನ ತೊಡೆಯ ಮೇಲೆಯೂ ವಸ್ತ್ರದ ಮೇಲೆಯೂ--ರಾಜಾ ಧಿರಾಜನೂ ಕರ್ತರ ಕರ್ತನೂ ಎಂಬ ಹೆಸರು ಬರೆದದೆ.

19:17b.REV.019.017 ಆಮೇಲೆ ಒಬ್ಬ ದೂತನು ಸೂರ್ಯನಲ್ಲಿ ನಿಂತಿರುವದನ್ನು ನಾನು ಕಂಡೆನು. ಅವನು ಮಹಾ ಶಬ್ದದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ--ಬನ್ನಿರಿ, ಮಹಾ ದೇವರ ಭೋಜನಕ್ಕೆ ಕೂಡಿಕೊಳ್ಳಿರಿ,

19:18b.REV.019.018 ರಾಜರ ಮಾಂಸವನ್ನೂ ಸೈನ್ಯಾಧಿಪತಿ ಗಳ ಮಾಂಸವನ್ನೂ ಪರಾಕ್ರಮಶಾಲಿಗಳ ಮಾಂಸವನ್ನೂ ಕುದುರೆಗಳ ಮಾಂಸವನ್ನೂ ಅವುಗಳ ಮೇಲೆ ಕೂತವರ ಮಾಂಸವನ್ನೂ ಮತ್ತು ಸ್ವತಂತ್ರರೂ ದಾಸರೂ ಚಿಕ್ಕವರೂ ದೊಡ್ಡವರೂ ಇವರೆಲ್ಲರ ಮಾಂಸವನ್ನೂ ತಿನ್ನುವದಕ್ಕೆ ಬನ್ನಿರಿ ಎಂದು ಹೇಳಿದನು.

19:19b.REV.019.019 ತರುವಾಯ ಆ ಮೃಗವೂ ಭೂರಾಜರೂ ಅವರ ಸೈನ್ಯಗಳೂ ಆ ಕುದುರೆಯ ಮೇಲೆ ಕೂತಿದ್ದಾತನ ಮೇಲೆಯೂ ಆತನ ಸೈನ್ಯದ ಮೇಲೆಯೂ ಯುದ್ಧ ಮಾಡುವದಕ್ಕಾಗಿ ಕೂಡಿಬಂದಿರುವದನ್ನು ನಾನು ಕಂಡೆನು.

19:20b.REV.019.020 ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.

19:21b.REV.019.021 ಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.

20

20:1b.REV.020.001 ಆಗ ಒಬ್ಬ ದೂತನು ತಳವಿಲ್ಲದ ತಗ್ಗಿನ ಬೀಗದ ಕೈಯನ್ನೂ ದೊಡ್ಡ ಸರಪಣಿ ಯನ್ನೂ ತನ್ನ ಕೈಯಲ್ಲಿ ಹಿಡಿದುಕೊಂಡು ಪರಲೋಕ ದಿಂದ ಇಳಿದು ಬರುವದನ್ನು ನಾನು ಕಂಡೆನು.

20:2b.REV.020.002 ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನ ಸರ್ಪ ನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರುಷ ಬಂಧಿಸಿದನು.

20:3b.REV.020.003 ಆ ಸಾವಿರ ವರುಷ ತೀರುವ ತನಕ ಅವನು ಇನ್ನು ಎಂದಿಗೂ ಜನಾಂಗಗಳನ್ನು ಮರುಳು ಗೊಳಿಸದ ಹಾಗೆ ದೂತನು ಅವನನ್ನು ತಳವಿಲ್ಲದ ತಗ್ಗಿನಲ್ಲಿ ದೊಬ್ಬಿ ಅವನನ್ನು ಮುಚ್ಚಿ ಅದರ ಮೇಲೆ ಮುದ್ರೆ ಹಾಕಿದನು. ಆ ಸಾವಿರ ವರುಷಗಳಾದ ಮೇಲೆ ಅವನಿಗೆ ಸ್ವಲ್ಪ ಕಾಲ ಬಿಡುಗಡೆಯಾಗತಕ್ಕದ್ದು.

20:4b.REV.020.004 ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕೂತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ

20:5b.REV.020.005 ಮಿಕ್ಕ ಸತ್ತವರು ಆ ಸಾವಿರ ವರುಷ ತೀರುವತನಕ ತಿರಿಗಿ ಬದುಕಲಿಲ್ಲ; ಇದೇ ಪ್ರಥಮ ಪುನರುತ್ಥಾನವು.

20:6b.REV.020.006 ಪ್ರಥಮ ಪುನರುತ್ಥಾ ನದಲ್ಲಿ ಸೇರಿರುವವನು ಧನ್ಯನೂ ಪರಿಶುದ್ಧನೂ ಆಗಿ ದ್ದಾನೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ; ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಸಾವಿರ ವರುಷ ಆಳುವರು.

20:7b.REV.020.007 ಆ ಸಾವಿರ ವರುಷಗಳು ತೀರಿದ ಮೇಲೆ ಸೈತಾನನಿಗೆ ಅವನ ಸೆರೆಯಿಂದ ಬಿಡುಗಡೆಯಾಗುವದು.

20:8b.REV.020.008 ಅವನು ಹೊರಗೆ ಬಂದು ಭೂಮಿಯ ನಾಲ್ಕು ದಿಕ್ಕುಗಳಲ್ಲಿರುವ ಗೋಗ್‌ ಮಾಗೋಗ್‌ ಎಂಬ ಜನಾಂಗಗಳನ್ನು ಮರುಳುಗೊಳಿಸಿ ಅವರನ್ನು ಯುದ್ಧಕ್ಕೆ ಕೂಡಿಸುವನು; ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವದು.

20:9b.REV.020.009 ಅವರು ಭೂಮಿಯಲ್ಲೆಲ್ಲಾ ಹರಡಿಕೊಂಡು ಪರಿಶುದ್ಧರ ದಂಡಿಗೂ ಆ ಪ್ರಿಯ ಪಟ್ಟಣಕ್ಕೂ ಮುತ್ತಿಗೆ ಹಾಕಿದರು. ಆಗ ದೇವರ ಬಳಿಯಿಂದ ಬೆಂಕಿಯು ಪರಲೋಕ ದೊಳಗಿಂದ ಇಳಿದು ಬಂದು ಅವರನ್ನು ನುಂಗಿಬಿಟ್ಟಿತು.

20:10b.REV.020.010 ಇದಲ್ಲದೆ ಅವರನ್ನು ಮರುಳುಗೊಳಿಸಿದ ಸೈತಾನನು ಬೆಂಕಿ ಗಂಧಕಗಳುರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು; ಅಲ್ಲಿ ಮೃಗವೂ ಸುಳ್ಳು ಪ್ರವಾದಿಯೂ ಕೂಡ ಇದ್ದಾರೆ; ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆಪಡುತ್ತಿರುವರು.

20:11b.REV.020.011 ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು.

20:12b.REV.020.012 ಇದಲ್ಲದೆ ಸತ್ತವರಾದ ಚಿಕ್ಕವರೂ ದೊಡ್ಡವರೂ ದೇವರ ಮುಂದೆ ನಿಂತಿರುವದನ್ನು ನಾನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಜೀವಗ್ರಂಥವೆಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ

20:13b.REV.020.013 ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು; ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು; ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು.

20:14b.REV.020.014 ಆಮೇಲೆ ಮೃತ್ಯುವೂ ನರಕವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು; ಇದೇ ಎರಡನೆಯ ಮರಣವು.ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.

20:15b.REV.020.015 ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.

21

21:1b.REV.021.001 ತರುವಾಯ ನೂತನಾಕಾಶವನ್ನೂ ನೂತನ ಭೂಮಿಯನ್ನೂ ನಾನು ಕಂಡೆನು. ಮೊದ ಲಿನ ಆಕಾಶವೂ ಮೊದಲಿನ ಭೂಮಿಯೂ ಗತಿಸಿ ಹೋದವು; ಇನ್ನು ಸಮುದ್ರವಿರುವದೇ ಇಲ್ಲ.

21:2b.REV.021.002 ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವದನ್ನು ಯೋಹಾನನೆಂಬ ನಾನು ಕಂಡೆನು; ಅದು ತನ್ನ ಮದಲಿಂಗನಿಗೋಸ್ಕರ ಅಲಂಕೃತಳಾದ ಮದಲಗಿತ್ತಿಯಂತೆ ಸಿದ್ಧವಾಗಿತ್ತು.

21:3b.REV.021.003 ಇದಲ್ಲದೆ ಪರಲೋಕದೊಳಗಿಂದ ಬಂದ ಮಹಾಶಬ್ದವು ನನಗೆ ಕೇಳಿಸಿತು. ಅದು-ಇಗೋ, ದೇವರ ಗುಡಾರವು ಮನುಷ್ಯರೊಂದಿಗೆ ಅದೆ; ಆತನು ಅವರೊಡನೆ ವಾಸ ಮಾಡುವನು, ಅವರು ಆತನ ಪ್ರಜೆಗಳಾಗಿರುವರು; ದೇವರು ತಾನೇ ಅವರ ಸಂಗಡ ಇರುವನು, ಇದಲ್ಲದೆ ಆತನು ಅವರ ದೇವರಾಗಿ

21:4b.REV.021.004 ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣ ವಿರುವದಿಲ್ಲ. ಇನ್ನು ದುಃಖವಾಗಲಿ ಗೋಳಾಟವಾಗಲಿ ನೋವಾಗಲಿ ಇರುವದೇ ಇಲ್ಲ. ಮೊದಲಿದ್ದವುಗಳೆಲ್ಲಾ ಇಲ್ಲದೆ ಹೋದವು ಎಂದು ಹೇಳಿತು.

21:5b.REV.021.005 ಆಗ ಸಿಂಹಾಸ ನದ ಮೇಲೆ ಕೂತಿದ್ದಾತನು--ಇಗೋ, ಎಲ್ಲವನ್ನು ನಾನು ಹೊಸದು ಮಾಡುತ್ತೇನೆ ಅಂದನು. ಆತನು ನನಗೆ--ಈ ಮಾತುಗಳು ಸತ್ಯವಾದವುಗಳು ನಂಬ ತಕ್ಕವುಗಳೂ ಆಗಿವೆ ಎಂಬದಾಗಿ ಬರೆ ಎಂದು ನನಗೆ ಹೇಳಿದನು.

21:6b.REV.021.006 ಇದಲ್ಲದೆ ಆತನು ನನಗೆ--ಎಲ್ಲಾ ಮುಗಿಯಿತು. ನಾನು ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವದ ನೀರಿನ ಬುಗ್ಗೆಯಿಂದ ನಾನು ನೀರನ್ನು ಉಚಿತವಾಗಿ ಕೊಡುವೆನು.

21:7b.REV.021.007 ಜಯಹೊಂದುವವನು ಎಲ್ಲವುಗಳಿಗೆ ಬಾಧ್ಯನಾಗುವನು; ನಾನು ಅವನ ದೇವರಾಗಿರುವೆನು. ಅವನು ನನ್ನ ಮಗನಾಗಿರುವನು.

21:8b.REV.021.008 ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.

21:9b.REV.021.009 ಕಡೇ ಏಳು ಉಪದ್ರವಗಳಿಂದ ತುಂಬಿದ ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡುತ್ತಾ--ಇಲ್ಲಿಗೆ ಬಾ, ಕುರಿಮರಿಯಾದಾತನಿಗೆ ಹೆಂಡತಿಯಾಗ ತಕ್ಕ ಮದಲಗಿತ್ತಿಯನ್ನು ನಿನಗೆ ತೋರಿಸುವೆನು ಎಂದು ಹೇಳಿದನು.

21:10b.REV.021.010 ಅವನು ಆತ್ಮದಲ್ಲಿ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ ಪರಲೋಕ ದೊಳಗಿಂದ ಪರಿಶುದ್ಧವಾದ ಯೆರೂಸಲೇಮೆಂಬ ಆ ದೊಡ್ಡ ಪಟ್ಟಣವು ದೇವರ ಕಡೆಯಿಂದ ಇಳಿದು ಬರುವ ದನ್ನು ನನಗೆ ತೋರಿಸಿದನು.

21:11b.REV.021.011 ಅದರಲ್ಲಿ ದೇವರ ಮಹಿಮೆ ಇತ್ತು; ಪಟ್ಟಣದ ಪ್ರಕಾಶವು ಅಮೂಲ್ಯವಾದ ಕಲ್ಲಿನ ಪ್ರಕಾಶಕ್ಕೆ ಸಮಾನವಾಗಿತ್ತು; ಅದು ಸೂರ್ಯ ಕಾಂತದಂತೆ ಥಳಥಳಿಸುತ್ತಿತ್ತು.

21:12b.REV.021.012 ಆ ಪಟ್ಟಣಕ್ಕೆ ಬಹಳ ಎತ್ತರವಾದ ಗೋಡೆ ಇತ್ತು; ಅದಕ್ಕೆ ಹನ್ನೆರಡು ಹೆಬ್ಬಾಗಿಲು ಗಳಿದ್ದವು; ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೂತರಿದ್ದರು; ಅವುಗಳ ಮೇಲೆ ಇಸ್ರಾ ಯೇಲ್ಯರ ಹನ್ನೆರಡು ಗೋತ್ರಗಳ ಹೆಸರುಗಳು ಬರೆ ದಿದ್ದವು.

21:13b.REV.021.013 ಪೂರ್ವ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲು ಗಳು. ಉತ್ತರ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು, ದಕ್ಷಿಣ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು, ಪಶ್ಚಿಮ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು ಇದ್ದವು.

21:14b.REV.021.014 ಪಟ್ಟಣದ ಗೋಡೆಗೆ ಹನ್ನೆರಡು ಅಸ್ತಿವಾರಗಳಿದ್ದವು; ಅವುಗಳ ಮೇಲೆ ಕುರಿಮರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು.

21:15b.REV.021.015 ನನ್ನ ಸಂಗಡ ಮಾತನಾಡುತ್ತಿದ್ದವನು ಆ ಪಟ್ಟಣವನ್ನೂ ಅದರ ಹೆಬ್ಬಾಗಿಲುಗಳನ್ನೂ ಗೋಡೆಯನ್ನೂ ಅಳತೆ ಮಾಡು ವದಕ್ಕಾಗಿ ಚಿನ್ನದ ಅಳತೆ ಕೋಲನ್ನು ಹಿಡಿದಿದ್ದನು.

21:16b.REV.021.016 ಪಟ್ಟಣವು ಚಚ್ಚೌಕವಾಗಿದೆ; ಅದರ ಉದ್ದವು ಅದರ ಅಗಲದಷ್ಟಿದೆ. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು; ಅಳತೆಯು ಹನ್ನೆರಡು ನೂರು ಮೈಲಿ ಆಯಿತು. ಅದರ ಉದ್ದವೂ ಅಗಲವೂ ಎತ್ತರವೂ ಸಮವಾಗಿವೆ.

21:17b.REV.021.017 ಅದರ ಗೋಡೆಯನ್ನು ಅವನು ಅಳತೆ ಮಾಡಿದನು; ಅದು ನೂರನಾಲ್ವತ್ತ ನಾಲ್ಕು ಮೊಳ ದಷ್ಟಿತ್ತು. ಈ ಲೆಕ್ಕದಲ್ಲಿ ಮನುಷ್ಯನ ಮೊಳ ಅಂದರೆ ದೂತನ ಮೊಳ.

21:18b.REV.021.018 ಆ ಗೋಡೆಯ ಕಟ್ಟಡವು ಸೂರ್ಯ ಕಾಂತದಿಂದ ಆಗಿತ್ತು; ಪಟ್ಟಣವು ಶುದ್ಧ ಗಾಜಿನಂತಿರುವ ಸೋಸಿದ ಭಂಗಾರವೇ.

21:19b.REV.021.019 ಪಟ್ಟಣದ ಗೋಡೆಯ ಅಸ್ತಿವಾರಗಳು ಸಕಲವಿಧವಾದ ಅಮೂಲ್ಯವಾದ ಕಲ್ಲುಗಳಿಂದ ಅಲಂಕೃತವಾಗಿದ್ದವು. ಮೊದಲನೆಯ ಅಸ್ತಿ ವಾರವು ಸೂರ್ಯಕಾಂತ, ಎರಡನೆಯದು ನೀಲಮಣಿ, ಮೂರನೆಯದು ಕೆಂಪು, ನಾಲ್ಕನೆಯದು ಪಚ್ಚೆ.

21:20b.REV.021.020 ಐದನೆಯದು ಗೋಮೇಧಿಕ. ಆರನೆಯದು ಮಾಣಿಕ್ಯ, ಏಳನೆಯದು ಪೀತರತ್ನ, ಎಂಟನೆಯದು ಬೆರುಲ್ಲ, ಒಂಭತ್ತನೆಯದು ಪುಷ್ಯರಾಗ, ಹತ್ತನೆಯದು ಗರುಡಪಚ್ಚೆ, ಹನ್ನೊಂದನೆಯದು ಕೆಂಗಿತ್ತಳೆ, ಹನ್ನೆರಡನೆ ಯದು ನೀಲಸ್ಪಟಿಕ.

21:21b.REV.021.021 ಹನ್ನೆರಡು ಹೆಬ್ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು; ಒಂದೊಂದು ಬಾಗಿಲು ಒಂದೊಂದು ಮುತ್ತಿನಿಂದ ಮಾಡಲ್ಪಟ್ಟಿತ್ತು. ಪಟ್ಟಣದ ಬೀದಿಯು ಸ್ವಚ್ಛವಾದ ಗಾಜಿನಂತಿರುವ ಸೋಸಿದ ಬಂಗಾರವಾಗಿತ್ತು.

21:22b.REV.021.022 ಪಟ್ಟಣದಲ್ಲಿ ನಾನು ಆಲಯವನ್ನು ಕಾಣಲಿಲ್ಲ; ಯಾಕಂದರೆ ಸರ್ವಶಕ್ತನಾದ ದೇವರಾಗಿ ರುವ ಕರ್ತನೂ ಕುರಿಮರಿಯಾದಾತನೂ ಅದರ ಆಲಯವಾಗಿದ್ದಾರೆ.

21:23b.REV.021.023 ಪಟ್ಟಣದಲ್ಲಿ ಬೆಳಕನ್ನು ಕೊಡು ವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ. ಯಾಕಂದರೆ ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು; ಕುರಿಮರಿಯಾದಾತನೇ ಅದರ ದೀಪ.

21:24b.REV.021.024 ರಕ್ಷಿಸಲ್ಪಟ್ಟ ಜನಾಂಗದವರು ಅದರ ಬೆಳಕಿನಲಿ ನಡೆಯುವರು; ಭೂರಾಜರು ತಮ್ಮ ವೈಭವವನ್ನೂ ಘನವನ್ನೂ ಅಲ್ಲಿಗೆ ತರುವರು.

21:25b.REV.021.025 ಅದರ ಹೆಬ್ಬಾಗಿಲು ಗಳನ್ನು ಹಗಲಿನಲ್ಲಿ ಮುಚ್ಚುವದೇ ಇಲ್ಲ. ಯಾಕಂದರೆ ರಾತ್ರಿಯು ಅಲ್ಲಿಲ್ಲ.

21:26b.REV.021.026 ಅವರು ಜನಾಂಗಗಳ ವೈಭವ ವನ್ನೂ ಘನವನ್ನೂ ಅಲ್ಲಿಗೆ ತರುವರು.ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.

21:27b.REV.021.027 ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.

22

22:1b.REV.022.001 ಆಮೇಲೆ ಅವನು ಸ್ಫಟಿಕದಂತೆ ಸ್ವಚ್ಛವಾದ ಮತ್ತು ಶುದ್ಧವಾದ ಜೀವಜಲದ ನದಿ ಯನ್ನು ನನಗೆ ತೋರಿಸಿದನು; ಅದು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಹೊರಡುವ ದಾಗಿತ್ತು.

22:2b.REV.022.002 ಅದರ ಬೀದಿಯ ಮಧ್ಯದಲ್ಲಿಯೂ ಆ ನದಿಯ ಉಭಯ ಪಾರ್ಶ್ವಗಳಲ್ಲಿಯೂ ಜೀವವೃಕ್ಷವಿತ್ತು; ಅದು ತಿಂಗಳು ತಿಂಗಳಿಗೆ ಫಲವನ್ನು ಫಲಿಸುತ್ತಾ ಹನ್ನೆರಡು ತರದ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗದವರನ್ನು ವಾಸಿಮಾಡುವದಕ್ಕೆ ಇದ್ದವು.

22:3b.REV.022.003 ಇನ್ನು ಮೇಲೆ ಶಾಪವೇನೂ ಇರುವದಿಲ್ಲ; ಅದರಲ್ಲಿ ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನವಿರುವದು. ಆತನ ಸೇವಕರು ಆತನನ್ನು ಸೇವಿಸುವರು.

22:4b.REV.022.004 ಅವರು ಆತನ ಮುಖವನ್ನು ನೋಡುವರು; ಅವರ ಹಣೆಗಳ ಮೇಲೆ ಆತನ ಹೆಸರು ಇರುವದು.

22:5b.REV.022.005 ಅಲ್ಲಿ ಇನ್ನು ರಾತ್ರಿ ಇರುವದಿಲ್ಲ; ಅವರಿಗೆ ದೀಪವಾಗಲಿ ಸೂರ್ಯನ ಬೆಳಕಾಗಲಿ ಬೇಕಾಗಿರುವ ದಿಲ್ಲ; ಯಾಕಂದರೆ ದೇವರಾದ ಕರ್ತನೇ ಅವರಿಗೆ ಬೆಳಕನ್ನು ಕೊಡುವನು. ಅವರು ಯುಗಯುಗಾಂತರ ಗಳಲ್ಲಿಯೂ ಆಳುವರು.

22:6b.REV.022.006 ಆಮೇಲೆ ಅವನು ನನಗೆ--ಈ ಮಾತುಗಳು ನಂಬತಕ್ಕದ್ದೂ ಸತ್ಯವಾದದ್ದೂ ಆಗಿವೆ; ಪರಿಶುದ್ಧ ಪ್ರವಾದಿಗಳ ದೇವರಾದ ಕರ್ತನು ಬೇಗನೆ ಸಂಭವಿಸ ತಕ್ಕವುಗಳನ್ನು ತನ್ನ ಸೇವಕರಿಗೆ ತೋರಿಸುವದಕ್ಕಾಗಿ ತನ್ನ ದೂತನನ್ನು ಕಳುಹಿಸಿದನು.

22:7b.REV.022.007 ಇಗೋ, ನಾನು ಬೇಗನೆ ಬರುತ್ತೇನೆ. ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನೆಗಳನ್ನು ಕಾಪಾಡುವವನು ಧನ್ಯನು ಎಂದು ಹೇಳಿದನು.

22:8b.REV.022.008 ಯೋಹಾನನೆಂಬ ನಾನೇ ಈ ಸಂಗತಿಗಳನ್ನು ಕೇಳಿ ಕಂಡವನು. ನಾನು ಕೇಳಿ ಕಂಡಾಗ ಈ ವಿಷಯಗಳನು ನನಗೆ ತೋರಿಸಿದ ದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು.

22:9b.REV.022.009 ಆಗ ಅವನು ನನಗೆ--ಇದನ್ನು ಮಾಡಬೇಡ ನೋಡು; ಯಾಕಂದರೆ ನಾನು ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ ಈ ಪುಸ್ತಕ ದಲ್ಲಿ ಹೇಳಿರುವವುಗಳನ್ನು ಕೈಕೊಂಡು ನಡೆಯುವವ ರಿಗೂ ಜೊತೆಯ ಸೇವಕನಾಗಿದ್ದೇನೆ; ದೇವರನ್ನು ಆರಾಧಿಸು ಎಂದು ನನಗೆ ಹೇಳಿದನು.

22:10b.REV.022.010 ಇದಲ್ಲದೆ ಅವನು ನನಗೆ--ಈ ಪುಸ್ತಕದಲ್ಲಿರುವ ಪ್ರವಾದನೆಯ ಹೇಳಿಕೆಗಳಿಗೆ ಮುದ್ರೆಹಾಕಬೇಡ; ಯಾಕಂದರೆ ಸಮಯವು ಸವಿಾಪವಾಗಿದೆ.

22:11b.REV.022.011 ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ; ಮೈಲಿಗೆಯಾದವನು ಇನ್ನೂ ತನ್ನನ್ನು ಮೈಲಿಗೆ ಮಾಡಿಕೊಳ್ಳಲಿ; ನೀತಿವಂತನು ಇನ್ನೂ ನೀತಿವಂತ ನಾಗಲಿ; ಪವಿತ್ರನು ತಾನು ಇನ್ನೂ ಪವಿತ್ರನಾಗಿರಲಿ;

22:12b.REV.022.012 ಇಗೋ, ನಾನು ಬೇಗ ಬರುತ್ತೇನೆ; ನಾನು ಪ್ರತಿಯೊಬ್ಬನಿಗೆ ಅವನವನ ಕೆಲಸದ ಪ್ರಕಾರ ಕೊಡತಕ್ಕ ಪ್ರತಿಫಲವು ನನ್ನಲ್ಲಿದೆ.

22:13b.REV.022.013 ನಾನೇ ಅಲ್ಫಾಯೂ ಓಮೆಗವೂ ಆದಿಯೂ ಅಂತ್ಯವೂ ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.

22:14b.REV.022.014 ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವರು ಧನ್ಯರು; ಅವರಿಗೆ ಜೀವವೃಕ್ಷದ ಹಕ್ಕು ಇರುವದು; ಅವರು ಹೆಬ್ಬಾಗಿಲು ಗಳಿಂದ ಆ ಪಟ್ಟಣದೊಳಕ್ಕೆ ಸೇರುವರು.

22:15b.REV.022.015 ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.

22:16b.REV.022.016 ಯೇಸುವೆಂಬ ನಾನು ಸಭೆಗಳಲ್ಲಿ ಇವುಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ಬೇರೂ ಸಂತತಿಯೂ ಉದಯದ ಪ್ರಕಾಶವುಳ್ಳ ನಕ್ಷತ್ರವೂ ಆಗಿದ್ದೇನೆ.

22:17b.REV.022.017 ಆತ್ಮನೂ ಮದಲಗಿತ್ತಿಯೂ--ಬಾ, ಅನ್ನುತ್ತಾರೆ. ಕೇಳುವವನು--ಬಾ, ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.

22:18b.REV.022.018 ಈ ಪುಸ್ತಕದ ಪ್ರವಾದನಾವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೆ ನಾನು ಹೇಳುವ ಸಾಕ್ಷಿ ಏನಂ ದರೆ--ಯಾವನಾದರೂ ಇವುಗಳಿಗೆ ಕೂಡಿಸಿದರೆ ದೇವರು ಅವನಿಗೆ ಈ ಪುಸ್ತಕದಲ್ಲಿ ಬರೆದಿರುವ ಉಪ ದ್ರವಗಳನ್ನು ಕೂಡಿಸುವನು.

22:19b.REV.022.019 ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ವಾಕ್ಯಗಳಿಂದ ತೆಗೆದು ಬಿಟ್ಟರೆ ಜೀವಗ್ರಂಥದಿಂದಲೂ ಪರಿಶುದ್ಧ ಪಟ್ಟಣ ದಿಂದಲೂ ಈ ಪುಸ್ತಕದಲ್ಲಿ ಬರೆದಿರುವವುಗಳಿಂದಲೂ ಅವನ ಪಾಲನ್ನು ದೇವರು ತೆಗೆದುಬಿಡುವನು.

22:20b.REV.022.020 ಇವುಗಳನ್ನು ಸಾಕ್ಷೀಕರಿಸುವಾತನು--ಖಂಡಿತ ವಾಗಿ ನಾನು ಬೇಗ ಬರುತ್ತೇನೆ ಎಂದು ಹೇಳುತ್ತಾನೆ. ಆಮೆನ್‌. ಹಾಗೆಯೇ ಆಗಲಿ; ಕರ್ತನಾದ ಯೇಸುವೇ, ಬಾ.ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್‌.

22:21b.REV.022.021 ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್‌.


Holder of rights
Multilingual Bible Corpus

Citation Suggestion for this Object
TextGrid Repository (2025). Kannada Collection. Revelation (Kannada). Revelation (Kannada). Multilingual Parallel Bible Corpus. Multilingual Bible Corpus. https://hdl.handle.net/21.11113/0000-0016-A234-6