Joel (Kannada)
1
1:1b.JOE.001.001 ಪೆತೂವೇಲನ ಮಗನಾದ ಯೋವೇಲನಿಗೆ ಬಂದ ಕರ್ತನ ವಾಕ್ಯವು.
1:2b.JOE.001.002 ವೃದ್ಧರೇ, ಕೇಳಿರಿ! ದೇಶನಿವಾಸಿಗಳೇ, ನೀವೆಲ್ಲರೂ ಕಿವಿಗೊಡಿರಿ; ಇದು ನಿಮ್ಮ ದಿವಸಗಳಲ್ಲಾದರೂ ನಿಮ್ಮ ತಂದೆಗಳ ದಿವಸಗಳಲ್ಲಾದರೂ ಉಂಟಾಯಿತೋ?
1:3b.JOE.001.003 ಇದರ ವಿಷಯವನ್ನು ನಿಮ್ಮ ಮಕ್ಕಳಿಗೆ ತಿಳಿಸಿರಿ, ನಿಮ್ಮ ಮಕ್ಕಳು ತಮ್ಮ ಮಕ್ಕಳಿಗೂ ಅವರ ಮಕ್ಕಳು ಮತ್ತೊಂದು ತಲಾಂತರಕ್ಕೂ ತಿಳಿಸಲಿ.
1:4b.JOE.001.004 ಹುಳವು ಉಳಿಸಿದ್ದನ್ನು ಮಿಡತೆ ತಿಂದುಬಿಟ್ಟಿದೆ; ಮಿಡತೆ ಉಳಿಸಿದ್ದನ್ನು ಒಳಗೆ ನಾಶ ಮಾಡುವ ಹುಳವು ತಿಂದುಬಿಟ್ಟಿದೆ; ಅದು ಉಳಿಸಿದ್ದನ್ನು ಕಂಬಳಿ ಹುಳವು ತಿಂದುಬಿಟ್ಟಿದೆ.
1:5b.JOE.001.005 ಅಮಲೇರಿದವರೇ, ನೀವು ಎಚ್ಚತ್ತು ಅಳಿರಿ; ದ್ರಾಕ್ಷಾರಸ ಕುಡಿಯುವವರೆಲ್ಲರೇ, ಹೊಸ ದ್ರಾಕ್ಷಾ ರಸದ ನಿಮಿತ್ತ ಗೋಳಾಡಿರಿ; ಅದು ನಿಮ್ಮ ಬಾಯಿ ಯೊಳಗಿಂದ ತೆಗೆಯಲ್ಪಟ್ಟಿದೆ.
1:6b.JOE.001.006 ನನ್ನ ದೇಶದ ಮೇಲೆ ಒಂದು ಜನಾಂಗವು ಏರಿ ಬಂತು; ಅದು ಬಲವಾದದ್ದೂ ಲೆಕ್ಕವಿಲ್ಲದ್ದೂ; ಅದರ ಹಲ್ಲುಗಳು ಸಿಂಹದ ಹಲ್ಲುಗಳು, ದೊಡ್ಡ ಸಿಂಹದ ದವಡೆ ಹಲ್ಲುಗಳು ಅದಕ್ಕೆ ಉಂಟು.
1:7b.JOE.001.007 ಅದು ನನ್ನ ದ್ರಾಕ್ಷೇ ಬಳ್ಳಿಯನ್ನು ಹಾಳುಮಾಡಿ ನನ್ನ ಅಂಜೂರದ ಗಿಡವನ್ನು ಮುರಿದು ಹಾಕಿದೆ; ಅದನ್ನು ಸಂಪೂರ್ಣ ಸುಲಿದು ಬಿಸಾಡಿಬಿಟ್ಟಿದೆ; ಅದರ ಕೊಂಬೆ ಗಳು ಬಿಳುಪಾದವು.
1:8b.JOE.001.008 ಯೌವನದ ಗಂಡನಿಗೋಸ್ಕರ ಗೋಣೀತಟ್ಟು ಧರಿಸಿದ ಕನ್ಯೆಯ ಹಾಗೆ ಪ್ರಲಾಪಿಸು.
1:9b.JOE.001.009 ಆಹಾರ ದರ್ಪಣೆಯೂ ಪಾನಾರ್ಪಣೆಯೂ ಕರ್ತನ ಆಲಯದೊಳಗಿಂದ ತೆಗೆಯಲ್ಪಟ್ಟಿವೆ; ಕರ್ತನ ಸೇವಕ ರಾದ ಯಾಜಕರು ಗೋಳಾಡುತ್ತಾರೆ.
1:10b.JOE.001.010 ಹೊಲವು ಹಾಳಾಗಿದೆ; ಭೂಮಿಯು ಗೋಳಾಡುತ್ತದೆ; ಧಾನ್ಯವು ಹಾಳಾಗಿದೆ; ಹೊಸ ದ್ರಾಕ್ಷಾರಸವು ಒಣಗಿದೆ; ಎಣ್ಣೆ ಬಾಡಿಹೋಗಿದೆ.
1:11b.JOE.001.011 ಓ ಒಕ್ಕಲಿಗರೇ, ನಾಚಿಕೆಪಡಿರಿ; ಗೋಧಿ, ಜವೆ ಗೋಧಿಗಳ ನಿಮಿತ್ತ ದ್ರಾಕ್ಷೇ ತೋಟದವರೇ, ಗೋಳಾ ಡಿರಿ; ಹೊಲದ ಪೈರು ನಾಶವಾಯಿತು.
1:12b.JOE.001.012 ದ್ರಾಕ್ಷೇ ಬಳ್ಳಿ ಒಣಗಿಹೋಗಿದೆ; ಅಂಜೂರದಮರ ಬಾಡಿ ಹೋಗಿದೆ; ದಾಳಿಂಬರದಗಿಡವೂ ಖರ್ಜೂರದ ಗಿಡವೂ ಸೇಬು ಗಿಡವೂ ಹೊಲದ ಮರಗಳೆಲ್ಲವೂ ಒಣಗಿಹೋಗಿವೆ; ಸಂತೋಷವು ಮನುಷ್ಯರ ಪುತ್ರರನ್ನು ಬಿಟ್ಟು ಒಣಗಿಹೋಗಿದೆ.
1:13b.JOE.001.013 ಯಾಜಕರೇ, ನಿಮ್ಮ ನಡುಕಟ್ಟಿಕೊಂಡು ಗೋಳಾ ಡಿರಿ; ಬಲಿಪೀಠದ ಸೇವಕರೇ, ಗೋಳಾಡಿರಿ; ನನ್ನ ದೇವರ ಸೇವಕರೇ, ಬಂದು ಗೋಣೀತಟ್ಟಿನಲ್ಲಿ ರಾತ್ರಿ ಯೆಲ್ಲಾ ಮಲಗಿರಿ, ಯಾಕಂದರೆ ಆಹಾರದರ್ಪಣೆಯೂ ಪಾನ ದರ್ಪಣೆಯೂ ನಿಮ್ಮ ದೇವರ ಆಲಯದಿಂದ ಹಿಂತೆಗೆಯಲ್ಪಟ್ಟಿವೆ.
1:14b.JOE.001.014 ಉಪವಾಸವನ್ನು ಪರಿಶುದ್ಧ ಮಾಡಿರಿ; ಪವಿತ್ರ ಸಂಘವನ್ನು ಕರೆಯಿರಿ; ಹಿರಿಯ ರನ್ನೂ ದೇಶದ ನಿವಾಸಿಗಳೆಲ್ಲರನ್ನೂ ನಿಮ್ಮ ದೇವರಾದ ಕರ್ತನ ಆಲಯದಲ್ಲಿ ಕೂಡಿಸಿ ಕರ್ತನಿಗೆ ಮೊರೆಯಿ ಡಿರಿ.
1:15b.JOE.001.015 ಆ ದಿನಕ್ಕಾಗಿ ಅಯ್ಯೋ, ಯಾಕಂದರೆ ಕರ್ತನ ದಿನವು ಸವಿಾಪವಾಗಿದೆ; ಸರ್ವಶಕ್ತನ ಕಡೆಯಿಂದ ನಾಶದಂತೆ ಬರುತ್ತದೆ.
1:16b.JOE.001.016 ನಮ್ಮ ಕಣ್ಣುಗಳ ಮುಂದೆ ಆಹಾರವೂ ನಮ್ಮ ದೇವರ ಆಲಯದಿಂದ ಸಂತೋ ಷವೂ ಉಲ್ಲಾಸವೂ ತೆಗೆಯಲ್ಪಟ್ಟಿವೆಯಲ್ಲವೋ?
1:17b.JOE.001.017 ಬೀಜವು ಅವರ ಹೆಂಟೆಗಳ ಕೆಳಗೆ ಕೆಟ್ಟುಹೋಗಿದೆ; ಉಗ್ರಾಣಗಳು ನಾಶವಾಗಿವೆ; ಕಣಜಗಳು ಕೆಡವಲ್ಪ ಟ್ಟಿವೆ; ಧಾನ್ಯವು ಒಣಗಿದೆ.
1:18b.JOE.001.018 ಪಶುಗಳು ಎಷ್ಟೋ ಮುಲುಗುತ್ತವೆ; ದನದ ಹಿಂಡುಗಳು ಕಳವಳಗೊಂಡಿವೆ; ಅವಕ್ಕೆ ಮೇವು ಇಲ್ಲ; ಕುರಿಮಂದೆಗಳು ಸಹ ನಾಶ ವಾಗುತ್ತವೆ.
1:19b.JOE.001.019 ಓ ಕರ್ತನೇ, ನಿನಗೆ ನಾನು ಮೊರೆಯಿಡುತ್ತೇನೆ; ಬೆಂಕಿಯು ಅಡವಿಯ ಮೇವಿನ ಸ್ಥಳಗಳನ್ನು ನುಂಗಿಬಿಟ್ಟಿದೆ; ಜ್ವಾಲೆಯು ಅಡವಿಯ ಮರಗಳನ್ನೆಲ್ಲಾ ಸುಟ್ಟುಬಿಟ್ಟಿದೆ.ಅಡವಿಯ ಮೃಗಗಳು ಸಹ ನಿನ್ನ ಕಡೆಗೆ ಹೂಂಕರಿಸುತ್ತವೆ; ನೀರಿನ ಹೊಳೆಗಳು ಬತ್ತಿ ಹೋಗಿವೆ; ಬೆಂಕಿಯು ಅಡವಿಯ ಮೇವಿನ ಸ್ಥಳಗಳನ್ನು ದಹಿಸಿಬಿಟ್ಟಿದೆ.
1:20b.JOE.001.020 ಅಡವಿಯ ಮೃಗಗಳು ಸಹ ನಿನ್ನ ಕಡೆಗೆ ಹೂಂಕರಿಸುತ್ತವೆ; ನೀರಿನ ಹೊಳೆಗಳು ಬತ್ತಿ ಹೋಗಿವೆ; ಬೆಂಕಿಯು ಅಡವಿಯ ಮೇವಿನ ಸ್ಥಳಗಳನ್ನು ದಹಿಸಿಬಿಟ್ಟಿದೆ.
2
2:1b.JOE.002.001 ನೀವು ಚೀಯೋನಿನಲ್ಲಿ ಕೊಂಬುಊದಿರಿ, ನನ್ನ ಪರಿಶುದ್ಧ ಪರ್ವತದಲ್ಲಿ ಆರ್ಭಟಿಸಿರಿ; ದೇಶದ ನಿವಾಸಿಗಳೆಲ್ಲರೂ ನಡುಗಲಿ; ಯಾಕಂದರೆ ಕರ್ತನ ದಿನವು ಬರುತ್ತದೆ; ಅದು ಸವಿಾಪ ವಾಗಿದೆ.
2:2b.JOE.002.002 ಕತ್ತಲೆಯೂ ಮೊಬ್ಬೂ ಉಳ್ಳ ದಿವಸವೂ; ಮೇಘವೂ ಕಾರ್ಗತ್ತಲೂ ಉಳ್ಳ ದಿವಸ ವೂ; ಬೆಟ್ಟಗಳ ಮೇಲೆ ಹಾಸಿರುವ ಉದಯದ ಹಾಗಿದೆ. ದೊಡ್ಡ ಬಲವಾದ ಜನವು; ಅದರ ಹಾಗೆ ಎಂದೂ ಇದ್ದದ್ದಿಲ್ಲ; ಅದರ ತರುವಾಯ ತಲತಲಾಂತರಗಳ ವರುಷಗಳ ವರೆಗೆ ಇನ್ನು ಇರುವದೇ ಇಲ್ಲ.
2:3b.JOE.002.003 ಅವರ ಮುಂದೆ ಬೆಂಕಿ ದಹಿಸುತ್ತದೆ; ಅವರ ಹಿಂದೆ ಜ್ವಾಲೆ ಸುಡುತ್ತದೆ; ಅವರ ಮುಂದೆ ದೇಶವು ಏದೆನ್ ತೋಟದ ಹಾಗಿದೆ; ಅವರ ಹಿಂದೆ ಹಾಳಾದ ಕಾಡು; ಹೌದು, ಅವುಗಳಿಗೆ ಯಾವದೂ ತಪ್ಪಿಸಿಕೊಳ್ಳಲಾರದು.
2:4b.JOE.002.004 ಅವರ ಆಕಾರವು ಕುದುರೆಗಳ ಆಕಾರದ ಹಾಗಿದೆ; ಸವಾರರ ಹಾಗೆಯೇ ಓಡುತ್ತಾರೆ.
2:5b.JOE.002.005 ಪರ್ವತಾಗ್ರಗಳಲ್ಲಿ ರಥಗಳ ಶಬ್ದದಂತೆ ಹಾರುತ್ತಾರೆ; ಕೂಳೆಯನ್ನು ದಹಿಸುವ ಬೆಂಕಿಯ ಜ್ವಾಲೆಯ ಶಬ್ದದ ಹಾಗೆಯೂ ಯುದ್ಧಕ್ಕೆ ಸಿದ್ಧವಾದ ಬಲವುಳ್ಳ ಜನರ ಹಾಗೆಯೂ
2:6b.JOE.002.006 ಅವರ ಮುಂದೆ ಜನರು ಬಹಳವಾಗಿ ನೊಂದುಕೊಳ್ಳುತ್ತಾರೆ. ಎಲ್ಲಾ ಮುಖಗಳು ಕಳೆಗುಂದುತ್ತವೆ.
2:7b.JOE.002.007 ಶೂರರ ಹಾಗೆ ಓಡುತ್ತಾರೆ; ಯುದ್ಧ ಶಾಲಿಗಳ ಹಾಗೆ ಗೋಡೆ ಏರುತ್ತಾರೆ; ಒಬ್ಬೊಬ್ಬನು ತನ್ನ ತನ್ನ ಮಾರ್ಗದಲ್ಲಿ ಹೋಗುತ್ತಾನೆ; ತಮ್ಮ ಹಾದಿ ಗಳನ್ನು ಬದಲು ಮಾಡುವದಿಲ್ಲ.
2:8b.JOE.002.008 ಒಬ್ಬನು ಇನ್ನೊಬ್ಬ ನನ್ನು ನೂಕುವದಿಲ್ಲ; ಅವರಲ್ಲಿ ಪ್ರತಿಯೊಬ್ಬನು ತನ್ನ ತನ್ನ ದಾರಿಯಲ್ಲಿ ಹೋಗುತ್ತಾನೆ; ಆಯುಧಗಳಲ್ಲಿ ಬಿದ್ದರೂ ಗಾಯವಾಗುವದಿಲ್ಲ.
2:9b.JOE.002.009 ಪಟ್ಟಣದಲ್ಲಿ ಅತ್ತಿತ್ತ ತಿರುಗಾಡುತ್ತಾರೆ; ಗೋಡೆಯ ಮೇಲೆ ಓಡುತ್ತಾರೆ; ಮನೆಗಳ ಮೇಲೆ ಹತ್ತುತ್ತಾರೆ; ಕಳ್ಳನ ಹಾಗೆ ಕಿಟಕಿಗಳಿಂದ ಪ್ರವೇಶಿಸುತ್ತಾರೆ.
2:10b.JOE.002.010 ಅವರ ಮುಂದೆ ಭೂಮಿಯು ನಡುಗುತ್ತದೆ; ಆಕಾಶಗಳು ಅದುರುತ್ತವೆ; ಸೂರ್ಯ ಚಂದ್ರರು ಕಪ್ಪಾಗುತ್ತವೆ; ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆ ಮಾಡುತ್ತವೆ.
2:11b.JOE.002.011 ಕರ್ತನು ತನ್ನ ಸೈನ್ಯದ ಮುಂದೆ ತನ್ನ ಶಬ್ದವನ್ನು ಮಾಡುತ್ತಾನೆ; ಆತನ ದಂಡು ಬಹು ದೊಡ್ಡದಾಗಿದೆ; ಹೌದು, ಬಲವಾದ ದ್ದಾಗಿದ್ದು ಆತನ ವಾಕ್ಯವನ್ನು ನಡಿಸುತ್ತದೆ; ಕರ್ತನ ದಿನವು ದೊಡ್ಡದು, ಮಹಾ ಭಯಂಕರವಾದದ್ದು, ಅದನ್ನು ತಾಳಿಕೊಳ್ಳುವವನ್ಯಾರು?
2:12b.JOE.002.012 ಹೀಗಿರುವದರಿಂದ ಈಗ ಕರ್ತನು ಅನ್ನುವದೇ ನಂದರೆ--ಪೂರ್ಣ ಹೃದಯದಿಂದಲೂ ಉಪವಾಸ ದಿಂದಲೂ ಅಳುವಿಕೆಯಿಂದಲೂ ಗೋಳಾಟದಿಂದ ಲೂ ನನ್ನ ಕಡೆಗೆ ತಿರುಗಿಕೊಳ್ಳಿರಿ.
2:13b.JOE.002.013 ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯವನ್ನು ಹರಕೊಂಡು ನಿಮ್ಮ ದೇವರಾದ ಕರ್ತನ ಕಡೆಗೆ ತಿರುಗಿಕೊಳ್ಳಿರಿ; ಆತನು ದಯೆ ಕರುಣೆ ದೀರ್ಘಶಾಂತಿ ಮಹಾ ಕೃಪೆಯೂ ಉಳ್ಳವನಾಗಿ ಕೇಡಿಗೆ ಪಶ್ಚಾತ್ತಾಪಪಡುತ್ತಾನೆ.
2:14b.JOE.002.014 ಆತನು ತಿರುಗಿಕೊಂಡು ಪಶ್ಚಾತ್ತಾಪಪಟ್ಟು ತನ್ನ ಹಿಂದೆ ಆಶೀರ್ವಾದವನ್ನು ಅಂದರೆ ನಿಮ್ಮ ದೇವರಾದ ಕರ್ತನಿಗಾಗಿ ಆಹಾರ ದರ್ಪಣೆಯನ್ನೂ ಪಾನದರ್ಪಣೆಯನ್ನೂ ಉಳಿಸುವ ನೇನೋ ಯಾರು ಬಲ್ಲರು?
2:15b.JOE.002.015 ಚೀಯೋನಿನಲ್ಲಿ ಕೊಂಬು ಊದಿರಿ; ಉಪವಾಸವನ್ನು ಪರಿಶುದ್ಧ ಮಾಡಿರಿ; ಪವಿತ್ರ ಸಂಘವನ್ನು ಕರೆಯಿರಿ.
2:16b.JOE.002.016 ಜನರನ್ನು ಕೂಡಿಸಿರಿ, ಸಭೆಯನ್ನು ಪರಿಶುದ್ಧಮಾಡಿರಿ; ಹಿರಿಯರನ್ನು ಒಟ್ಟುಗೂಡಿಸಿರಿ, ಮಕ್ಕಳನ್ನೂ ಮೊಲೆ ಕೂಸುಗಳನ್ನೂ ಕೂಡಿಸಿರಿ; ಮದುಮಗನು ತನ್ನ ಕೊಠಡಿಯೊಳ ಗಿಂದಲೂ ಮದುಮಗಳು ತನ್ನ ಅರೆಯೊಳಗಿಂದಲೂ ಹೊರಡಲಿ.
2:17b.JOE.002.017 ಕರ್ತನ ಸೇವಕರಾದ ಯಾಜಕರು ಅಂಗಳಕ್ಕೂ ಬಲಿಪೀಠಕ್ಕೂ ನಡುವೆ ಅತ್ತು ಹೀಗೆ ಹೇಳಲಿ--ಓ ಕರ್ತನೇ, ನಿನ್ನ ಜನರನ್ನು ಕನಿಕರಿಸು, ಜನಾಂಗಗಳು ಅವರ ಮೇಲೆ ಆಳುವ ಹಾಗೆ ನಿನ್ನ ಬಾಧ್ಯತೆಯನ್ನು ನಿಂದೆಗೆ ಒಪ್ಪಿಸಬೇಡ; ಅವರ ದೇವರು ಎಲ್ಲಿ ಎಂದು ಅವರು ಜನಗಳಲ್ಲಿ ಯಾಕೆ ಹೇಳಬೇಕು?
2:18b.JOE.002.018 ಆಗ ಕರ್ತನು ತನ್ನ ದೇಶಕ್ಕೋಸ್ಕರ ರೋಷ ಗೊಂಡು ತನ್ನ ಜನರನ್ನು ಕನಿಕರಿಸುವನು.
2:19b.JOE.002.019 ಹೌದು, ಕರ್ತನು ಉತ್ತರ ಕೊಟ್ಟು ತನ್ನ ಜನರಿಗೆ ಹೇಳುವದೇ ನಂದರೆ--ಇಗೋ, ನಾನು ನಿಮಗೆ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಸಾಕಾಗುವಷ್ಟು ಕಳು ಹಿಸಿ ನಿಮ್ಮನ್ನು ಇನ್ನು ಮೇಲೆ ಜನಾಂಗಗಳಲ್ಲಿ ನಿಂದಿತ ರಾಗಿ ಇಡುವದಿಲ್ಲ.
2:20b.JOE.002.020 ಆದರೆ ಉತ್ತರ ದಿಕ್ಕಿನ ಸೈನ್ಯವನ್ನು ನಿಮಗೆ ದೂರಮಾಡಿ ಅವನನ್ನು ಒಣ ಭೂಮಿಗೂ ಅರಣ್ಯಕ್ಕೂ ಅವನ ಮುಂಭಾಗವನ್ನು ಪೂರ್ವದ ಸಮುದ್ರಕ್ಕೂ ಅವನ ಹಿಂಭಾಗವನ್ನು ಪಶ್ಚಿಮ ಸಮು ದ್ರಕ್ಕೂ ಓಡಿಸಿ ಬಿಡುವೆನು; ಅವನ ದುರ್ವಾಸನೆಯು ಏರುವದು; ಅವನ ನಾತವು ಏರುವದು; ಅವನು ದೊಡ್ಡದಾದವುಗಳನ್ನು ಮಾಡಿದ್ದಾನೆ.
2:21b.JOE.002.021 ಓ ದೇಶವೇ, ಭಯಪಡಬೇಡ, ಉಲ್ಲಾಸಿಸಿ ಸಂತೋಷವಾಗಿರು; ಕರ್ತನು ಮಹತ್ತಾದವುಗಳನ್ನು ಮಾಡುತ್ತಾನೆ.
2:22b.JOE.002.022 ಹೊಲದ ಮೃಗಗಳೇ, ಭಯಪಡಬೇಡಿರಿ; ಅಡ ವಿಯ ಮೇವಿನ ಸ್ಥಳಗಳು ಮೊಳೆಯುತ್ತವೆ; ಮರಗಳು ತಮ್ಮ ಫಲವನ್ನು ಫಲಿಸುತ್ತವೆ; ಅಂಜೂರದ ಗಿಡವೂ ದ್ರಾಕ್ಷೇ ಬಳ್ಳಿಯೂ ತಮ್ಮ ಫಲವನ್ನು ಕೊಡುತ್ತವೆ.
2:23b.JOE.002.023 ಹಾಗಾದರೆ ಚೀಯೋನಿನ ಮಕ್ಕಳೇ, ನಿಮ್ಮ ದೇವ ರಾದ ಕರ್ತನಲ್ಲಿ ಉಲ್ಲಾಸಿಸಿ, ಸಂತೋಷವಾಗಿರ್ರಿ; ನಿಮಗೆ ಮುಂಗಾರು ಮಳೆಯನ್ನು ಸರಿಯಾಗಿ ಕೊಡು ತ್ತಾನೆ; ಮುಂಗಾರು ಹಿಂಗಾರು ಮಳೆಗಳನ್ನು ಮುಂಚಿನ ಹಾಗೆ ನಿಮಗೆ ಸುರಿಸುತ್ತಾನೆ.
2:24b.JOE.002.024 ಕಣಗಳು ಧಾನ್ಯದಿಂದ ತುಂಬುವವು; ತೊಟ್ಟಿಗಳು ದ್ರಾಕ್ಷಾರಸದಿಂದಲೂ ಎಣ್ಣೆಯಿಂದಲೂ ತುಂಬಿ ತುಳುಕುವವು.
2:25b.JOE.002.025 ನಾನು ನಿಮ್ಮಲ್ಲಿ ಕಳುಹಿಸದಂಥ, ನನ್ನ ದೊಡ್ಡ ಸೈನ್ಯವಾದ ಹುಳವೂ ಕಂಬಳಿ ಹುಳವೂ ಒಳಗೆ ನಾಶಮಾಡುವ ಹುಳವೂ ಮಿಡತೆಗಳೂ ತಿಂದ ವರುಷಗಳಿಗೆ ಬದಲಾಗಿ ನಿಮಗೆ ಕೊಡುವೆನು.
2:26b.JOE.002.026 ಸಮೃದ್ಧಿಯಾಗಿ ಉಂಡು, ತೃಪ್ತಿಪಟ್ಟು ನಿಮ್ಮಲ್ಲಿ ಅದ್ಭುತದಿಂದ ನಡಿಸಿದ ನಿಮ್ಮ ದೇವರಾದ ಕರ್ತನ ಹೆಸರನ್ನು ಸ್ತುತಿಸುವಿರಿ; ನನ್ನ ಜನರು ಎಂದೆಂದಿಗೂ ನಾಚಿಕೆಪಡರು.
2:27b.JOE.002.027 ನಾನು ಇಸ್ರಾಯೇಲಿನ ಮಧ್ಯದಲ್ಲಿ ಇದ್ದೇನೆಂದೂ ಮತ್ತೊಬ್ಬ ನಲ್ಲ, ನಾನೇ ನಿಮ್ಮ ದೇವರಾದ ಕರ್ತನಾಗಿದ್ದೇನೆಂದೂ ನೀವು ತಿಳುಕೊಳ್ಳುವಿರಿ; ನನ್ನ ಜನರು ಎಂದೆಂದಿಗೂ ನಾಚಿಕೆಪಡರು.
2:28b.JOE.002.028 ಆಮೇಲೆ ಆಗುವದೇನಂದರೆ--ಎಲ್ಲಾ ಶರೀರಗಳ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಆಗ ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿ ಸುವರು; ನಿಮ್ಮ ವೃದ್ಧರು ಕನಸುಗಳನ್ನು ಕಾಣುವರು; ನಿಮ್ಮ ಯೌವನಸ್ಥರು ದರ್ಶನಗಳನ್ನು ನೋಡುವರು.
2:29b.JOE.002.029 ದಾಸರ ಮೇಲೆಯೂ ದಾಸಿಯರ ಮೇಲೆಯೂ ಆ ದಿವಸಗಳಲ್ಲಿ ನನ್ನ ಆತ್ಮವನ್ನು ಸುರಿಸುವೆನು.
2:30b.JOE.002.030 ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನೂ ರಕ್ತವನ್ನೂ ಬೆಂಕಿಯನ್ನೂ ಹೊಗೆಯ ಸ್ತಂಭಗಳನ್ನೂ ತೋರಿಸುವೆನು.
2:31b.JOE.002.031 ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ, ಸೂರ್ಯನು ಕತ್ತಲೆಗೂ ಚಂದ್ರನು ರಕ್ತಕ್ಕೂ ಮಾರ್ಪಡುವವು.ಆಗುವದೇನಂದರೆ--ಕರ್ತನ ಹೆಸರನ್ನು ಹೇಳಿ ಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು; ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಕರ್ತನು ಕರೆಯುವ ಉಳಿದವರಲ್ಲಿಯೂ ಕರ್ತನು ಹೇಳಿದ ಪ್ರಕಾರ ಬಿಡುಗಡೆಯು ಇರುವದು.
2:32b.JOE.002.032 ಆಗುವದೇನಂದರೆ--ಕರ್ತನ ಹೆಸರನ್ನು ಹೇಳಿ ಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು; ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಕರ್ತನು ಕರೆಯುವ ಉಳಿದವರಲ್ಲಿಯೂ ಕರ್ತನು ಹೇಳಿದ ಪ್ರಕಾರ ಬಿಡುಗಡೆಯು ಇರುವದು.
3
3:1b.JOE.003.001 ಇಗೋ, ಆ ದಿನಗಳಲ್ಲಿಯೂ ಆ ಸಮಯದಲ್ಲಿಯೂ ನಾನು ಯೆಹೂದದ ಮತ್ತು ಯೆರೂಸಲೇಮಿನ ಸೆರೆಯನ್ನು ತಿರುಗಿಸುವಾಗ
3:2b.JOE.003.002 ಎಲ್ಲಾ ಜನಾಂಗಗಳನ್ನು ಕೂಡಿಸಿ ಯೆಹೋಷಾಫಾಟನ ತಗ್ಗಿಗೆ ಅವರನ್ನು ಇಳಿಸಿ ನನ್ನ ಜನರೂ ನನ್ನ ಬಾಧ್ಯತೆಯೂ ಆಗಿರುವ ಇಸ್ರಾಯೇಲಿನ ವಿಷಯ ಅವರ ಸಂಗಡ ವ್ಯಾಜ್ಯವಾಡುವೆನು; ಅವರು ಅವರನ್ನು ಜನಾಂಗಗಳಲ್ಲಿ ಚದರಿಸಿ ನನ್ನ ದೇಶವನ್ನು ಪಾಲಿಟ್ಟು
3:3b.JOE.003.003 ನನ್ನ ಜನರಿ ಗೋಸ್ಕರ ಚೀಟು ಹಾಕಿ ಹುಡುಗನನ್ನು ಸೂಳೆಗಾಗಿ ಕೊಟ್ಟು, ಹುಡುಗಿಯನ್ನು ದ್ರಾಕ್ಷಾರಸಕ್ಕಾಗಿ ಮಾರಿ ಅವರು ಕುಡಿಯುವ ಹಾಗೆ ಮಾರಿದ್ದಾರಲ್ಲಾ?
3:4b.JOE.003.004 ಹೌದು, ಓ ತೂರೇ, ಚೀದೋನೇ, ಪಾಲೆಸ್ತಿನದ ಎಲ್ಲಾ ಪ್ರಾಂತ್ಯಗಳೇ, ನನ್ನ ಕೂಡ ನಿಮಗೇನು? ನನಗೆ ಮುಯ್ಯಿಗೆ ಮುಯ್ಯಿ ಸಲ್ಲಿಸುವಿರೋ? ನೀವು ನನಗೆ ಸಲ್ಲಿಸಿದರೆ ಜಾಗ್ರತೆಯಾಗಿಯೂ ತ್ವರೆಯಾಗಿಯೂ ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿ ತರಿಸುವೆನು.
3:5b.JOE.003.005 ನೀವು ನನ್ನ ಬೆಳ್ಳಿಯನ್ನೂ ನನ್ನ ಬಂಗಾರವನ್ನೂ ತೆಗೆದುಕೊಂಡು ನನ್ನ ಒಳ್ಳೇ ರಮ್ಯವಾದವುಗಳನ್ನು ನಿಮ್ಮ ದೇವಸ್ಥಾನಗಳಿಗೆ ತಕ್ಕೊಂಡು ಹೋಗಿದ್ದೀರಿ.
3:6b.JOE.003.006 ಯೆಹೂದದ ಮಕ್ಕಳನ್ನೂ ಯೆರೂಸಲೇಮಿನ ಮಕ್ಕ ಳನ್ನೂ ತಮ್ಮ ಪ್ರಾಂತ್ಯಗಳಿಂದ ದೂರ ಮಾಡುವ ಹಾಗೆ ಗ್ರೀಕರಿಗೆ ಮಾರಿದ್ದೀರಿ.
3:7b.JOE.003.007 ಇಗೋ, ಎಲ್ಲಿ ಅವ ರನ್ನು ಮಾರಿದ್ದಿರೋ ಆ ಸ್ಥಳದಿಂದ ನಾನು ಅವರನ್ನು ಎಬ್ಬಿಸಿ ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿ ತರಿಸುವೆನು.
3:8b.JOE.003.008 ನಿಮ್ಮ ಕುಮಾರರನ್ನೂ ನಿಮ್ಮ ಕುಮಾರ್ತೆ ಯರನ್ನೂ ಯೆಹೂದನ ಮಕ್ಕಳ ಕೈಯಲ್ಲಿ ಮಾರುವೆನು; ಇವರು ಅವರನ್ನು ದೂರ ಜನವಾದ ಶೆಬದನರಿಗೆ ಮಾರುವರು; ಕರ್ತನು ಅದನ್ನು ಹೇಳಿದ್ದಾನೆ.
3:9b.JOE.003.009 ಜನಾಂಗಗಳಲ್ಲಿ ಇದನ್ನು ಘೋಷಿಸಿರಿ; ಯುದ್ಧವನ್ನು ಸಿದ್ಧಮಾಡಿರಿ, ಶೂರರನ್ನು ಎಬ್ಬಿಸಿರಿ; ಯುದ್ಧಸ್ಥರೆಲ್ಲರು ಸವಿಾಪಕ್ಕೆ ಬರಲಿ.
3:10b.JOE.003.010 ನಿಮ್ಮ ನೇಗಿಲುಗಳ ಗುಳಗಳನ್ನು ಕತ್ತಿಗಳಾಗಿಯೂ ನಿಮ್ಮ ಕುಡುಗೋಲುಗಳನ್ನು ಈಟಿಗಳಾ ಗಿಯೂ ಬಡಿಯಿರಿ; ಬಲಹೀನನು--ನಾನು ಶೂರ ನೆಂದು ಹೇಳಲಿ.
3:11b.JOE.003.011 ಸುತ್ತಲಿನ ಎಲ್ಲಾ ಅನ್ಯಜನಾಂಗ ಗಳೇ, ಕೂಡಿಕೊಳ್ಳಿರಿ; ಓ ಕರ್ತನೇ, ನಿನ್ನ ಶೂರರನ್ನು ಅಲ್ಲಿ ಇಳಿಯ ಮಾಡು.
3:12b.JOE.003.012 ಜನಾಂಗಗಳು ಎಬ್ಬಿಸಲ್ಪಟ್ಟು ಯೆಹೋಷಾಫಾಟನ ತಗ್ಗಿಗೆ ಬರಲಿ; ಸುತ್ತಲಿನ ಎಲ್ಲಾ ಜನಾಂಗಗಳಿಗೆ ನ್ಯಾಯತೀರಿಸುವದಕ್ಕೆ ನಾನು ಅಲ್ಲಿ ಕೂತುಕೊಳ್ಳುವೆನು.
3:13b.JOE.003.013 ಕುಡುಗೋಲನ್ನು ಹಾಕಿರಿ, ಬೆಳೆ ಪಕ್ವವಾಯಿತು; ಬಂದು ಇಳಿಯಿರಿ; ದ್ರಾಕ್ಷೆಯ ಅಲೆ ತುಂಬಿ ಅದೆ; ತೊಟ್ಟಿಗಳು ತುಳುಕುತ್ತವೆ; ಅವರ ಕೆಟ್ಟತನವು ಬಹಳವಾಗಿದೆ.
3:14b.JOE.003.014 ನಿರ್ಣಯದ ತಗ್ಗಿನಲ್ಲಿ ಗುಂಪುಗಳು, ಗುಂಪುಗಳು; ಕರ್ತನ ದಿನವು ನಿರ್ಣ ಯದ ತಗ್ಗಿನಲ್ಲಿ ಸವಿಾಪವಾಗಿದೆ.
3:15b.JOE.003.015 ಸೂರ್ಯ, ಚಂದ್ರ ಕಪ್ಪಾಗುವವು; ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆಮಾಡುವವು.
3:16b.JOE.003.016 ಕರ್ತನು ಚೀಯೋನಿನೊಳಗಿಂದ ಘರ್ಜಿಸಿ ಯೆರೂಸಲೇಮಿನೊಳಗಿಂದ ತನ್ನ ಶಬ್ದವನ್ನು ಕೊಡುವನು. ಆಕಾಶಗಳೂ ಭೂಮಿಯೂ ಕದಲು ವವು; ಆದರೆ ಕರ್ತನು ತನ್ನ ಜನರಿಗೆ ನಿರೀಕ್ಷೆಯೂ ಇಸ್ರಾಯೇಲನ ಮಕ್ಕಳಿಗೆ ಬಲವೂ ಆಗಿರುವನು.
3:17b.JOE.003.017 ಹೀಗೆ ನನ್ನ ಪರಿಶುದ್ಧ ಪರ್ವತವಾದ ಚೀಯೋನಿ ನಲ್ಲಿ ವಾಸಿಸುವ ನಿಮ್ಮ ದೇವರಾದ ಕರ್ತನು ನಾನೇ ಎಂದು ನೀವು ತಿಳುಕೊಳ್ಳುವಿರಿ; ಆಗ ಯೆರೂಸಲೇಮು ಪರಿಶುದ್ಧವಾಗಿರುವದು; ಅನ್ಯರು ಇನ್ನು ಅದರಲ್ಲಿ ಹಾದುಹೋಗರು.
3:18b.JOE.003.018 ಆ ದಿನದಲ್ಲಿ ಆಗುವದೇನಂ ದರೆ, ಬೆಟ್ಟಗಳು ಹೊಸ ದ್ರಾಕ್ಷಾರಸವನ್ನು ಸುರಿಯುವವು; ಗುಡ್ಡಗಳು ಹಾಲಿನಿಂದ ಹರಿಯುವವು; ಯೆಹೂದದ ಹಳ್ಳಗಳೆಲ್ಲಾ ನೀರಿನಿಂದ ಹರಿಯುವವು; ಕರ್ತನ ಆಲಯದೊಳಗಿಂದ ಬುಗ್ಗೆ ಹೊರಟು, ಶಿಟ್ಟೀಮಿನ ತಗ್ಗಿಗೆ ಜಲ ಕೊಡುವದು.
3:19b.JOE.003.019 ಐಗುಪ್ತವು ಹಾಳಾಗು ವದು; ಎದೋಮು ಹಾಳಾದ ಅರಣ್ಯವಾಗುವದು; ಅವರು ಯೆಹೂದನ ಮಕ್ಕಳನ್ನು ಬಲಾತ್ಕಾರಮಾಡಿ ತಮ್ಮ ದೇಶದಲ್ಲಿ ಅಪರಾಧವಿಲ್ಲದ ರಕ್ತವನ್ನು ಚೆಲ್ಲಿ ದರು.
3:20b.JOE.003.020 ಆದರೆ ಯೆಹೂದವು ಎಂದೆಂದಿಗೂ ಯೆರೂಸಲೇಮು ತಲತಲಾಂತರಕ್ಕೂ ನಿಲ್ಲುವದು.ನಾನು ಕ್ಷಮಿಸದೆ ಇದ್ದ ಅವರ ರಕ್ತಾಪರಾಧವನ್ನು ಕ್ಷಮಿಸುವೆನು, ಕರ್ತನು ಚೀಯೋನಿನಲ್ಲಿ ವಾಸವಾಗಿರುತ್ತಾನೆ.
3:21b.JOE.003.021 ನಾನು ಕ್ಷಮಿಸದೆ ಇದ್ದ ಅವರ ರಕ್ತಾಪರಾಧವನ್ನು ಕ್ಷಮಿಸುವೆನು, ಕರ್ತನು ಚೀಯೋನಿನಲ್ಲಿ ವಾಸವಾಗಿರುತ್ತಾನೆ.
- Holder of rights
- Multilingual Bible Corpus
- Citation Suggestion for this Object
- TextGrid Repository (2025). Kannada Collection. Joel (Kannada). Joel (Kannada). Multilingual Parallel Bible Corpus. Multilingual Bible Corpus. https://hdl.handle.net/21.11113/0000-0016-A1C5-3