Nahum (Kannada)
1
1:1b.NAH.001.001 ನಿನೆವೆಯ ಭಾರವು. ಎಲ್ಕೋಷಿನವನಾದ ನಹೂಮನ ದರ್ಶನದ ಪುಸ್ತಕವು.
1:2b.NAH.001.002 ಕರ್ತನು ರೋಷವುಳ್ಳಂಥ, ಮುಯ್ಯಿಗೆಮುಯ್ಯಿ ಕೊಡುವಂಥ ದೇವರು; ಕರ್ತನು ಮುಯ್ಯಿಗೆ ಮುಯ್ಯಿ ಕೊಡುವಂಥ ಉಗ್ರವುಳ್ಳಾತನು, ಕರ್ತನು ತನ್ನ ವೈರಿ ಗಳಿಗೆ ಮುಯ್ಯಿಗೆಮುಯ್ಯಿ ತೀರಿಸಿ ತನ್ನ ಶತ್ರುಗಳ ಮೇಲೆ ಕೋಪವನ್ನು ಇಟ್ಟುಕೊಳ್ಳುತ್ತಾನೆ.
1:3b.NAH.001.003 ಕರ್ತನು ಕೋಪಿಸುವದರಲ್ಲಿ ನಿಧಾನ ಮಾಡುವವನಾದರೂ ಶಕ್ತಿಯಲ್ಲಿ ಮಹತ್ತಾದವನು; ದುರ್ಮಾರ್ಗದವರನ್ನು ಎಷ್ಟು ಮಾತ್ರಕ್ಕೂ ನಿರ್ಮಲರೆಂದು ತೀರ್ಮಾನಿಸ ದವನು; ಕರ್ತನ ಮಾರ್ಗವು ಸುಳಿಗಾಳಿಯಲ್ಲಿಯೂ ಬಿರುಗಾಳಿಯಲ್ಲಿಯೂ ಉಂಟು; ಮೇಘಗಳು ಆತನ ಕಾಲುಗಳ ಧೂಳೇ.
1:4b.NAH.001.004 ಆತನು ಸಮುದ್ರವನ್ನು ಗದರಿಸಿ ಅದನ್ನು ಒಣಗುವಂತೆ ಮಾಡುತ್ತಾನೆ; ನದಿಗಳನ್ನೆಲ್ಲಾ ಬತ್ತಿಹೋಗುವಂತೆ ಮಾಡುತ್ತಾನೆ; ಬಾಷಾನೂ ಕರ್ಮೆಲೂ ಬಾಡಿಹೋಗುತ್ತವೆ, ಲೆಬನೋನಿನ ಹೂವು ಬಾಡಿಹೋಗುತ್ತದೆ.
1:5b.NAH.001.005 ಬೆಟ್ಟಗಳು ಆತನ ಮುಂದೆ ಕಂಪಿಸುತ್ತವೆ; ಗುಡ್ಡಗಳು ಕರಗುತ್ತವೆ; ಭೂಮಿಯೂ ಹೌದು, ಲೋಕವೂ ಅದರಲ್ಲಿ ವಾಸಿಸು ವವರೆಲ್ಲರೂ ಆತನ ಮುಂದೆ ಸುಟ್ಟು ಹೋಗುವರು.
1:6b.NAH.001.006 ಆತನ ರೌದ್ರದ ಎದುರಿಗೆ ಯಾರು ನಿಲ್ಲುವರು? ಆತನ ರೋಷಾಗ್ನಿಗೆ ಯಾರು ನಿಂತುಕೊಳ್ಳುವರು? ಆತನ ಉಗ್ರವು ಬೆಂಕಿಯ ಹಾಗೆ ಸುರಿಸಲ್ಪಟ್ಟಿದೆ; ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.
1:7b.NAH.001.007 ಕರ್ತನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಬಲವಾದ ಕೋಟೆಯಾಗಿದ್ದಾನೆ; ತನ್ನಲ್ಲಿ ನಂಬಿಕೆಯಿಡು ವವರನ್ನು ಬಲ್ಲನು.
1:8b.NAH.001.008 ಆದರೆ ಮೇರೆ ವಿಾರುವ ಪ್ರಳಯ ದಿಂದ ಅದರ ಸ್ಥಳವನ್ನು ಮುಗಿಸಿಬಿಡುವನು; ಕತ್ತಲೆ ಆತನ ಶತ್ರುಗಳನ್ನು ಹಿಂದಟ್ಟುವದು.
1:9b.NAH.001.009 ಕರ್ತನಿಗೆ ವಿರೋಧವಾಗಿ ಏನು ಯೋಚಿಸುತ್ತೀರಿ? ಆತನು ಸಂಪೂರ್ಣವಾಗಿ ಮುಗಿಸಿಬಿಡುತ್ತಾನೆ; ಇಕ್ಕಟ್ಟು ಎರ ಡನೇ ಸಾರಿ ಏಳದು.
1:10b.NAH.001.010 ಅವರು ಮುಳ್ಳುಗಳ ಹಾಗೆ ಹೊಂದಿಕೊಂಡಿದ್ದರೂ ತಮ್ಮ ದ್ರಾಕ್ಷಾರಸದಿಂದ ಮತ್ತ ರಾಗಿದ್ದರೂ ಪೂರ್ಣವಾಗಿ ಒಣಗಿದ ಕೊಳೆಯಂತೆ ನಾಶವಾಗುವರು.
1:11b.NAH.001.011 ಕರ್ತನಿಗೆ ವಿರೋಧವಾಗಿ ದುರಾ ಲೋಚನೆ ಮಾಡಿ ಕೇಡನ್ನು ಯೋಚಿಸುವವನು ನಿನ್ನೊಳ ಗಿಂದ ಹೊರಟಿದ್ದಾನೆ.
1:12b.NAH.001.012 ಕರ್ತನು ಹೀಗೆ ಹೇಳು ತ್ತಾನೆ--ಅವರು ಸುಖವುಳ್ಳವರಾಗಿಯೂ ಬಹು ಮಂದಿ ಯಾಗಿಯೂ ಇದ್ದರೂ ಆತನು ಹಾದುಹೋಗುವಾಗ ಹೀಗೆ ಕಡಿಯಲ್ಪಡುವರು; ನಾನು ನಿನ್ನನ್ನು ಕಷ್ಟಪಡಿಸಿ ದಾಗ್ಯೂ ಇನ್ನು ಮೇಲೆ ಕಷ್ಟಪಡಿಸೆನು.
1:13b.NAH.001.013 ಆದರೆ ನಾನು ಈಗ ನಿನ್ನ ಮೇಲಿಂದ ಆತನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಡುವೆನು.
1:14b.NAH.001.014 ನಿನ್ನ ವಿಷಯವಾಗಿ ಕರ್ತನು ಆಜ್ಞಾಪಿಸುವದೇ ನಂದರೆ--ನಿನ್ನ ಹೆಸರುಳ್ಳವರು ಇನ್ನು ಬಿತ್ತಲ್ಪಡರು; ನಿನ್ನ ದೇವರುಗಳ ಮನೆಯೊಳಗಿಂದ ಕೆತ್ತಿದ ವಿಗ್ರಹ ವನ್ನೂ ಎರಕ ಹೊಯಿದದ್ದನ್ನೂ ಕಡಿದುಬಿಡುವೆನು; ನೀನು ತುಚ್ಛನಾದದ್ದರಿಂದ ನಿನಗೆ ಸಮಾಧಿಯನ್ನು ಸಿದ್ಧಮಾಡುವೆನು.ಇಗೋ, ಬೆಟ್ಟಗಳ ಮೇಲೆ ಶುಭಸಮಾಚಾರವನ್ನು ತಂದು ಸಮಾಧಾನವನ್ನು ತಿಳಿಸುವವನ ಪಾದಗಳನ್ನು ನೋಡು. ಯೆಹೂದವೇ, ನಿನ್ನ ಪರಿಶುದ್ಧ ಹಬ್ಬಗಳನ್ನು ನಡೆಸು, ನಿನ್ನ ಪ್ರಮಾಣ ಗಳನ್ನು ಸಲ್ಲಿಸು; ಯಾಕಂದರೆ ಇನ್ನು ಮೇಲೆ ದುಷ್ಟನು ನಿನ್ನನ್ನು ಹಾದುಹೋಗನು; ಅವನು ಸಂಪೂರ್ಣವಾಗಿ ಕಡಿದು ಬಿಡಲ್ಪಟ್ಟಿದ್ದಾನೆ.
1:15b.NAH.001.015 ಇಗೋ, ಬೆಟ್ಟಗಳ ಮೇಲೆ ಶುಭಸಮಾಚಾರವನ್ನು ತಂದು ಸಮಾಧಾನವನ್ನು ತಿಳಿಸುವವನ ಪಾದಗಳನ್ನು ನೋಡು. ಯೆಹೂದವೇ, ನಿನ್ನ ಪರಿಶುದ್ಧ ಹಬ್ಬಗಳನ್ನು ನಡೆಸು, ನಿನ್ನ ಪ್ರಮಾಣ ಗಳನ್ನು ಸಲ್ಲಿಸು; ಯಾಕಂದರೆ ಇನ್ನು ಮೇಲೆ ದುಷ್ಟನು ನಿನ್ನನ್ನು ಹಾದುಹೋಗನು; ಅವನು ಸಂಪೂರ್ಣವಾಗಿ ಕಡಿದು ಬಿಡಲ್ಪಟ್ಟಿದ್ದಾನೆ.
2
2:1b.NAH.002.001 ಚೂರುಚೂರಾಗಿ ಒಡೆದು ಬಿಡುವವನು ನಿನ್ನ ಎದುರಿಗೆ ಬಂದಿದ್ದಾನೆ; ಆಯುಧ ಗಳನ್ನು ಭದ್ರಪಡಿಸು; ದಾರಿಯನ್ನು ಕಾಯಿ; ನಡುವನ್ನು ಬಲಪಡಿಸಿಕೋ, ನಿನ್ನ ಶಕ್ತಿಯನ್ನು ಬಲವಾಗಿ ಗಟ್ಟಿ ಮಾಡಿಕೋ.
2:2b.NAH.002.002 ಕರ್ತನು ಯಾಕೋಬನ ಹೆಚ್ಚಳವನ್ನು ಇಸ್ರಾಯೇಲಿನ ಹೆಚ್ಚಳದ ಹಾಗೆಯೇ ತಿರುಗಿಸಿಬಿಟ್ಟಿ ದ್ದಾನೆ; ಬರಿದು ಮಾಡುವವರು ಅವರನ್ನು ಬರಿದು ಮಾಡಿ ಅವರ ದ್ರಾಕ್ಷೇ ಬಳ್ಳಿಗಳನ್ನು ಕೆಡಿಸಿದ್ದಾರೆ.
2:3b.NAH.002.003 ಆತನ ಬಲಾಢ್ಯದ ಡಾಲು ಕೆಂಪಾಗಿದೆ; ಶೂರರು ರಕ್ತವರ್ಣದವರಾಗಿದ್ದಾರೆ; ಆತನು ಸಿದ್ಧಮಾಡುವ ದಿನ ದಲ್ಲಿ ರಥಗಳು ಹೊಳೆಯುವ ದೀವಟಿಗೆಗಳ ಹಾಗೆ ಇರುವವು; ಸೈಪ್ರಸ್ ಮರಗಳು ಭಯಂಕರವಾಗಿ ಅಲ್ಲಾ ಡಿಸಲ್ಪಡುವವು.
2:4b.NAH.002.004 ರಥಗಳು ಬೀದಿಗಳಲ್ಲಿ ರಭಸವಾಗಿ ಓಡಾಡುವವು. ಹೆದ್ದಾರಿಗಳಲ್ಲಿ ಒಂದಕ್ಕೊಂದು ತಗಲು ವವು; ದೀವಟಿಗೆಗಳ ಹಾಗೆ ತೋರುವವು, ಮಿಂಚುಗಳ ಹಾಗೆ ಓಡುವವು.
2:5b.NAH.002.005 ಆತನು ತನಗೆ ಯೋಗ್ಯವಾದವ ರನ್ನು ಗಮನಿಸುವನು. ಅವರು ತಮ್ಮ ನಡೆಯಲ್ಲಿ ಎಡವುವರು; ಅದರ ಗೋಡೆಯ ಬಳಿಗೆ ತ್ವರೆಯಾಗಿ ಬರುವರು; ರಕ್ಷಣೆಯು ಸಿದ್ಧಮಾಡಲ್ಪಡುವದು.
2:6b.NAH.002.006 ನದಿಗಳ ಬಾಗಲುಗಳು ತೆರೆಯಲ್ಪಡುವವು; ಅರಮನೆ ಕರಗಿಹೋಗುವದು.
2:7b.NAH.002.007 ಸ್ಥಿರವಾಗಿದ್ದವಳು ಸೆರೆಗೆ ಒಯ್ಯಲ್ಪಡುವಳು, ಮೇಲಕ್ಕೆ ತರಲ್ಪಡುವಳು; ಅವಳ ದಾಸಿಯರು ಪಾರಿವಾಳಗಳ ಶಬ್ದದಂತೆ ಮೂಲ್ಗುತ್ತ ಎದೆಬಡುಕೊಳ್ಳುವರು.
2:8b.NAH.002.008 ನಿನೆವೆ ಹುಟ್ಟಿದಂದಿನಿಂದ ನೀರಿನ ಕೆರೆಯ ಹಾಗಿತ್ತು; ಆದರೂ ಅವರು ಓಡಿಹೋಗುತ್ತಾರೆ; ನಿಲ್ಲಿರಿ, ನಿಲ್ಲಿರಿ ಅಂದರೂ ಒಬ್ಬನೂ ಹಿಂದಕ್ಕೆ ನೋಡುವದಿಲ್ಲ.
2:9b.NAH.002.009 ಬೆಳ್ಳಿಯನ್ನು ಸುಲುಕೊಳ್ಳಿರಿ; ಬಂಗಾರವನ್ನು ಸುಲುಕೊಳ್ಳಿರಿ; ಕೂಡಿಸಿಟ್ಟ ಧನಕ್ಕೂ ಸಕಲ ವಿಧವಾದ ಶ್ರೇಷ್ಠ ವಸ್ತುಗಳ ನಿಧಿಗೂ ಪಾರವೇ ಇಲ್ಲ.
2:10b.NAH.002.010 ಅದು ಬರಿದಾಗಿಯೂ, ಬೈಲಾಗಿಯೂ, ಹಾಳಾ ಗಿಯೂ ಇತ್ತು; ಹೃದಯ ಕರಗುತ್ತದೆ; ಮೊಣಕಾಲುಗಳು ಒಟ್ಟಾಗಿ ಬಡಿದುಕೊಳ್ಳುತ್ತವೆ. ಎಲ್ಲಾ ನಡುವುಗಳಲ್ಲಿ ಹೆಚ್ಚು ಸಂಕಟ ಉಂಟು; ಎಲ್ಲಾ ಮುಖಗಳು ಕಳೆ ಗುಂದುತ್ತವೆ.
2:11b.NAH.002.011 ಸಿಂಹದ ಗವಿಯೂ ಎಳೇ ಸಿಂಹಗಳು ಮೇಯುವ ಸ್ಥಳವು ಎಲ್ಲಿ? ಅಲ್ಲಿ ಮುದಿಸಿಂಹ, ಸಿಂಹಿಣಿ ಸಿಂಹದ ಮರಿಗಳು ನಡೆದಾಡಿದರೂ ಯಾರೂ ಹೆದರಿ ಸಲಿಲ್ಲವಲ್ಲಾ?
2:12b.NAH.002.012 ಸಿಂಹವು ತನ್ನ ಮರಿಗಳಿಗೆ ಸಾಕಾ ಗುವಷ್ಟು ಸೀಳಿ ತನ್ನ ಸಿಂಹಿಣಿಗಳಿಗೋಸ್ಕರ ಕೊರಳು ಹಿಸುಕಿ ಕೊಳ್ಳೆಯಿಂದ ತನ್ನ ಗವಿಗಳನ್ನೂ ಸುಲಿಗೆಯಿಂದ ತನ್ನ ಗುಹೆಗಳನ್ನೂ ತುಂಬಿಸುತ್ತಿತ್ತು.ಸೈನ್ಯಗಳ ಕರ್ತನು ಹೇಳುವದೇನಂದರೆ -- ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ; ಅದರ ರಥಗಳನ್ನು ಹೊಗೆಯಾ ಗಲು ಸುಡುತ್ತೇನೆ; ಕತ್ತಿಯು ನಿನ್ನ ಎಳೇ ಸಿಂಹಗಳನ್ನು ನುಂಗಿಬಿಡುವದು; ನಿನ್ನ ಕೊಳ್ಳೆಯನ್ನು ಭೂಮಿಯ ಮೇಲಿನಿಂದ ಕಡಿದುಬಿಡುತ್ತೇನೆ; ನಿನ್ನ ಸೇವಕರ ಶಬ್ದವು ಇನ್ನು ಕೇಳಲ್ಪಡುವದಿಲ್ಲ.
2:13b.NAH.002.013 ಸೈನ್ಯಗಳ ಕರ್ತನು ಹೇಳುವದೇನಂದರೆ -- ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ; ಅದರ ರಥಗಳನ್ನು ಹೊಗೆಯಾ ಗಲು ಸುಡುತ್ತೇನೆ; ಕತ್ತಿಯು ನಿನ್ನ ಎಳೇ ಸಿಂಹಗಳನ್ನು ನುಂಗಿಬಿಡುವದು; ನಿನ್ನ ಕೊಳ್ಳೆಯನ್ನು ಭೂಮಿಯ ಮೇಲಿನಿಂದ ಕಡಿದುಬಿಡುತ್ತೇನೆ; ನಿನ್ನ ಸೇವಕರ ಶಬ್ದವು ಇನ್ನು ಕೇಳಲ್ಪಡುವದಿಲ್ಲ.
3
3:1b.NAH.003.001 ರಕ್ತವುಳ್ಳ ಪಟ್ಟಣಕ್ಕೆ ಅಯ್ಯೋ! ಅದೆಲ್ಲಾ ಸುಳ್ಳಿನಿಂದಲೂ ಕಳ್ಳತನದಿಂದಲೂ ತುಂಬಿ ಯದೆ; ಕೊಳ್ಳೆಯನ್ನು ಬಿಡುವದಿಲ್ಲ.
3:2b.NAH.003.002 ಚಾವಟಿಗೆ ಚಬುಕಿನ ಶಬ್ದವೂ ಚಕ್ರಗಳ ಧಡಧಡನೆಯ ಶಬ್ದವೂ ಕುದುರೆಗಳ ಕುಣಿದಾಟವೂ ರಥಗಳ ಹಾರಾಟವೂ ಉಂಟು.
3:3b.NAH.003.003 ಸವಾರನು ಹತ್ತುತ್ತಾನೆ, ಕತ್ತಿಗಳು ಮಿಂಚು ತ್ತವೆ. ಈಟಿಗಳು ಥಳಥಳಿಸುತ್ತವೆ, ಹತವಾದವರು ಬಹಳ; ಹೆಣಗಳು ಬಹಳ; ಶವಗಳಿಗೆ ಅಂತ್ಯವೇ ಇಲ್ಲ; ಅವರು ಶವಗಳ ಮೇಲೆ ಎಡವುತ್ತಾರೆ.
3:4b.NAH.003.004 ಸೌಂದರ್ಯವುಳ್ಳ ಮಾಟಗಾರ್ತಿಯಾದ ಸೂಳೆಯ ಸೂಳೆತನಗಳು ಬಹಳ; ಅವಳು ತನ್ನ ಸೂಳೆತನಗಳಿಂದ ಜನಾಂಗಗಳನ್ನೂ ತನ್ನ ಮಾಟಗಳಿಂದ ಗೋತ್ರಗಳನ್ನೂ ಮಾರಿದಳಲ್ಲಾ?
3:5b.NAH.003.005 ಸೈನ್ಯಗಳ ಕರ್ತನು ಹೇಳುವದೇ ನಂದರೆ--ಇಗೋ, ನಾನು ನಿನಗೆ ವಿರೋಧವಾಗಿ ದ್ದೇನೆ; ನಿನ್ನ ಸೆರಗುಗಳನ್ನು ನಿನ್ನ ಮುಖದ ಮೇಲೆ ಎತ್ತಿ ಜನಾಂಗಗಳಿಗೆ ನಿನ್ನ ನಾಚಿಕೆಯನ್ನೂ ರಾಜ್ಯಗಳಿಗೆ ನಿನ್ನ ನಿಂದೆಯ ಬೆತ್ತಲೆತನವನ್ನೂ ತೋರಿಸುತ್ತೇನೆ.
3:6b.NAH.003.006 ಅಸಹ್ಯವಾದವುಗಳನ್ನು ನಿನ್ನ ಮೇಲೆ ಹಾಕಿ ನಿನ್ನನ್ನು ನೀಚಳನ್ನಾಗಿ ಮಾಡಿ ನಿನ್ನನ್ನು ನೋಟಕ್ಕೆ ಇಡುತ್ತೇನೆ.
3:7b.NAH.003.007 ಆಗ ಆಗುವದೇನಂದರೆ, ನಿನ್ನನ್ನು ನೋಡುವವ ರೆಲ್ಲರೂ ನಿನ್ನಿಂದ ಓಡಿಹೋಗಿ ನಿನೆವೆ ಹಾಳಾಯಿತು; ಅದಕ್ಕೆ ಯಾರು ಚಿಂತೆಪಡುವರು, ನಿನಗಾಗಿ ಆದರಿ ಸುವವರನ್ನು ನಾನು ಎಲ್ಲಿಂದ ಹುಡುಕಲಿ ಎಂದು ಹೇಳುವರು.
3:8b.NAH.003.008 ನದಿಗಳ ಬಳಿ ನೆಲೆಯಾಗಿದ್ದ ಅಮೋನಿಗಿಂತ ನೀನು ಒಳ್ಳೆಯವಳೋ? ಅದರ ಸುತ್ತಲೂ ನೀರಿತ್ತು; ಅದರ ಬಲವು ಸಮುದ್ರವೇ; ಸಮುದ್ರವು ಅದಕ್ಕೆ ಗೋಡೆ ಯಾಗಿತ್ತು.
3:9b.NAH.003.009 ಕೂಷೂ ಐಗುಪ್ತವೂ ಅದರ ಬಲ ವಾಗಿದ್ದವು; ಮತ್ತು ಲೆಕ್ಕವಿಲ್ಲದ್ದಾಗಿತ್ತು; ಪೂಟರೂ ಲೂಬ್ಯರೂ ನಿನ್ನ ಸಹಾಯಕರಾಗಿದ್ದರು.
3:10b.NAH.003.010 ಆದರೆ ಅದು ಸೆರೆಯಾಗಿ ದೇಶಾಂತರಕ್ಕೆ ಹೋಯಿತು; ಅದರ ಕೂಸುಗಳು ಸಹ ಎಲ್ಲಾ ಬೀದಿಗಳ ತುದಿಗಳಲ್ಲಿ ಜಜ್ಜ ಲ್ಪಟ್ಟವು; ಅದರ ಘನವುಳ್ಳವರಿಗೋಸ್ಕರ ಚೀಟು ಹಾಕಿದರು; ಅದರ ಮಹನೀಯರೆಲ್ಲರೂ ಸಂಕೋಲೆ ಗಳಿಂದ ಕಟ್ಟಲ್ಪಟ್ಟರು.
3:11b.NAH.003.011 ನೀನು ಸಹ ಅಮಲೇರಿದ್ದೀ, ಅಡಗಿಕೊಳ್ಳುವಿ; ನೀನು ಸಹ ಶತ್ರುವಿನ ನಿಮಿತ್ತ ತ್ರಾಣ ವನ್ನು ಹುಡುಕುವಿ.
3:12b.NAH.003.012 ನಿನ್ನ ಕೋಟೆಗಳೆಲ್ಲಾ ಮೊದಲನೇ ಹಣ್ಣುಗಳುಳ್ಳ ಅಂಜೂರದ ಗಿಡಗಳ ಹಾಗಿರುವವು; ಅಲ್ಲಾಡಿಸಲ್ಪಟ್ಟರೆ ತಿನ್ನುವವನ ಬಾಯಲ್ಲಿಯೇ ಬೀಳುವವು.
3:13b.NAH.003.013 ಇಗೋ, ನಿನ್ನ ಮಧ್ಯದಲ್ಲಿರುವ ನಿನ್ನ ಜನರು ಹೆಂಗಸರ ಹಾಗಿದ್ದಾರೆ; ನಿನ್ನ ದೇಶದ ಬಾಗಲುಗಳು ನಿನ್ನ ಶತ್ರುಗಳಿಗೆ ಅಗಲವಾಗಿ ತೆರೆಯಲ್ಪಡುವವು; ಬೆಂಕಿ ನಿನ್ನ ಅಗುಳಿಗಳನ್ನು ತಿಂದುಬಿಡುವದು.
3:14b.NAH.003.014 ಮುತ್ತಿಗೆಗೋಸ್ಕರ ನೀರನ್ನು ಸೇದು ನಿನ್ನ ಬಲವಾದ ಕೋಟೆಗಳನ್ನು ಭದ್ರ ಮಾಡು; ಕೆಸರಿನಲ್ಲಿ ಸೇರು ಮಣ್ಣನ್ನು ತುಳಿ, ಇಟ್ಟಿಗೆ ಗೂಡನ್ನು ಬಲಪಡಿಸು.
3:15b.NAH.003.015 ಅಲ್ಲೇ ಬೆಂಕಿ ನಿನ್ನನ್ನು ನುಂಗುವದು; ಕತ್ತಿಯು ನಿನ್ನನ್ನು ಕಡಿದುಬಿಡುವದು; ನಾಶಕ ಹುಳದಂತೆ ಅದು ನಿನ್ನನ್ನು ತಿಂದುಬಿಡುವದು; ನಾಶಕ ಹುಳದಂತೆ ಬಹು ಮಂದಿಯಾಗು; ಮಿಡತೆಗಳಂತೆ ಬಹು ಮಂದಿಯಾಗು.
3:16b.NAH.003.016 ನಿನ್ನ ವರ್ತಕರನ್ನು ಆಕಾಶದ ನಕ್ಷತ್ರಗಳಿಗಿಂತ ಹೆಚ್ಚಿ ಸಿದ್ದೀ; ನಾಶಕ ಹುಳವು ನಾಶಮಾಡಿ ಹಾರಿಹೋಗು ತ್ತದೆ.
3:17b.NAH.003.017 ನಿನ್ನ ಕಿರೀಟಧಾರಿಗಳು ಮಿಡತೆಗಳ ಹಾಗೆಯೂ ನಿನ್ನ ಅಧಿಪತಿಗಳು ತಂಪಾದ ದಿನದಲ್ಲಿ ಬೇಲಿಗಳೊಳಗೆ ಇಳುಕೊಳ್ಳುವ ದೊಡ್ಡ ಮಿಡತೆಗಳ ಹಾಗೆಯೂ ಇದ್ದಾರೆ; ಸೂರ್ಯನು ಹುಟ್ಟುವಾಗ ಹಾರಿಹೋಗು ತ್ತವೆ; ಆಗ ಅವು ಎಲ್ಲಿರುವವೆಂದು ಅವುಗಳ ಸ್ಥಳವು ತಿಳಿಯುವದಿಲ್ಲ;
3:18b.NAH.003.018 ಅಶ್ಶೂರ್ಯದ ಅರಸನೇ, ನಿನ್ನ ಕುರುಬರು ತೂಕಡಿಸುತ್ತಾರೆ, ನಿನ್ನ ಶ್ರೇಷ್ಠರು ಧೂಳಿನಲ್ಲಿ ಬಿದ್ದಿದ್ದಾರೆ; ನಿನ್ನ ಜನರು ಬೆಟ್ಟಗಳಲ್ಲಿ ಚದರಿ ಹೋಗಿ ದ್ದಾರೆ; ಕೂಡಿಸುವವರು ಯಾರೂ ಇಲ್ಲ.ನಿನ್ನ ಗಾಯವು ಗುಣಹೊಂದದು; ನಿನ್ನ ಗಾಯ ಕಠಿಣ ವಾದದ್ದು; ನಿನ್ನ ಸುದ್ದಿಯನ್ನು ಕೇಳುವವರೆಲ್ಲರು ನಿನಗೆ ಚಪ್ಪಾಳೆ ಹೊಡೆಯುವರು; ನಿನ್ನ ಕೆಟ್ಟತನವು ನಿತ್ಯವಾಗಿ ಯಾರ ಮೇಲೆ ಹಾದುಹೋಗದೆ ಇತ್ತು?
3:19b.NAH.003.019 ನಿನ್ನ ಗಾಯವು ಗುಣಹೊಂದದು; ನಿನ್ನ ಗಾಯ ಕಠಿಣ ವಾದದ್ದು; ನಿನ್ನ ಸುದ್ದಿಯನ್ನು ಕೇಳುವವರೆಲ್ಲರು ನಿನಗೆ ಚಪ್ಪಾಳೆ ಹೊಡೆಯುವರು; ನಿನ್ನ ಕೆಟ್ಟತನವು ನಿತ್ಯವಾಗಿ ಯಾರ ಮೇಲೆ ಹಾದುಹೋಗದೆ ಇತ್ತು?
- Holder of rights
- Multilingual Bible Corpus
- Citation Suggestion for this Object
- TextGrid Repository (2025). Kannada Collection. Nahum (Kannada). Nahum (Kannada). Multilingual Parallel Bible Corpus. Multilingual Bible Corpus. https://hdl.handle.net/21.11113/0000-0016-A1D4-2