2 Timothy (Kannada)
1
1:1b.2TI.001.001 ಕ್ರಿಸ್ತನ ಯೇಸುವಿನಲ್ಲಿರುವ ಜೀವ ವಾಗ್ದಾನದ ಪ್ರಕಾರ ದೇವರ ಚಿತ್ತದಿಂದ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನೆಂಬ ನಾನು
1:2b.2TI.001.002 ನನ್ನ ಅತಿ ಪ್ರಿಯಕುಮಾರನಾದ ತಿಮೊಥೆಯನಿಗೆ ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.
1:3b.2TI.001.003 ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ಜ್ಞಾಪಕ ಮಾಡುತ್ತೇನೆ. ಇದಲ್ಲದೆ ಶುದ್ಧ ಮನಸ್ಸಾಕ್ಷಿಯುಳ್ಳವನಾಗಿ ನಾನು ನನ್ನ ಪೂರ್ವಿಕ ರನ್ನು ಅನುಸರಿಸಿ ದೇವರನ್ನು ಸೇವಿಸಿ ಸ್ತೋತ್ರ ಸಲ್ಲಿಸು ತ್ತೇನೆ.
1:4b.2TI.001.004 ನಾನು ನಿನ್ನ ಕಣ್ಣೀರನ್ನು ನೆನಪಿಗೆ ತಂದು ನಿನ್ನನ್ನು ನೋಡಿ ಸಂತೋಷಭರಿತನಾಗಬೇಕೆಂದು ಬಹಳವಾಗಿ ಅಪೇಕ್ಷಿಸುತ್ತೇನೆ;
1:5b.2TI.001.005 ನಿನ್ನಲ್ಲಿರುವ ನಿಷ್ಕಪಟ ವಾದ ನಂಬಿಕೆಯು ನನ್ನ ನೆನಪಿಗೆ ಬಂತು. ಆ ನಂಬಿಕೆಯು ಮೊದಲು ನಿನ್ನ ಅಜ್ಜಿಯಾದ ಲೋವಿಯಲ್ಲಿಯೂ ನಿನ್ನ ತಾಯಿಯಾದ ಯೂನೀಕೆಯಲ್ಲಿಯೂ ವಾಸವಾಗಿತ್ತು: ಹಾಗೆಯೇ ಅದು ನಿನ್ನಲ್ಲಿಯೂ ವಾಸವಾಗಿದೆ ಎಂದು ನಾನು ದೃಢವಾಗಿ ನಂಬಿದ್ದೇನೆ.
1:6b.2TI.001.006 ಆದಕಾರಣ ನಾನು ನಿನಗೆ ಹಸ್ತಾರ್ಪಣ ಮಾಡು ವದರ ಮೂಲಕ ನಿನಗೆ ದೊರಕಿದ ದೇವರ ವರವು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಪಕ ಮಾಡುತ್ತೇನೆ.
1:7b.2TI.001.007 ದೇವರು ನಮಗೆ ಕೊಟ್ಟಿರುವ ಆತ್ಮವು ಬಲ ಪ್ರೀತಿ ಸ್ವಸ್ಥಬುದ್ಧಿಯ ಆತ್ಮವೇ ಹೊರತು ಭಯದ ಆತ್ಮವಲ್ಲ.
1:8b.2TI.001.008 ಹೀಗಿರುವದರಿಂದ ನಮ್ಮ ಕರ್ತನ ಸಾಕ್ಷಿಯ ವಿಷಯದಲ್ಲಿಯೂ ಆತನ ಸೆರೆಯವನಾದ ನನ್ನ ವಿಷಯದಲ್ಲಿಯೂ ನೀನು ನಾಚಿಕೆಪಡದೆ ದೇವರ ಬಲಕ್ಕನು ಸಾರವಾಗಿ ಸುವಾರ್ತೆಯ ನಿಮಿತ್ತ ಉಂಟಾಗುವ ಶ್ರಮೆಗಳಲ್ಲಿ ಪಾಲುಗಾರನಾಗಿರು.
1:9b.2TI.001.009 ಆತನು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತನ್ನ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಕರೆಯಿಂದ ನಮ್ಮನ್ನು ಕರೆದನು. ಆತನು ಜಗದುತ್ಪತ್ತಿಗೆ ಮುಂಚೆಯೇ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿದನು.
1:10b.2TI.001.010 ಈಗ ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಾಶ ಪಡಿಸಿದ್ದಾನೆ. ಈತನು ಮರಣವನ್ನು ನಿವೃತ್ತಿ ಮಾಡಿ ಸುವಾರ್ತೆಯ ಮೂಲಕ ಜೀವವನ್ನೂ ನಿರ್ಲಯತ್ವ ವನ್ನೂ ಪ್ರಕಾಶಗೊಳಿಸಿದನು.
1:11b.2TI.001.011 ಅದಕ್ಕೋಸ್ಕರ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ಅನ್ಯಜನ ರಿಗೆ ಉಪದೇಶಕನಾಗಿಯೂ ನೇಮಿಸಲ್ಪಟ್ಟೆನು.
1:12b.2TI.001.012 ಇದರ ನಿಮಿತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ಯಾಕಂ ದರೆ ನಾನು ನಂಬಿರುವಾತನನ್ನು ಬಲ್ಲೆನು, ನಾನು ಆತನಿಗೆ ಒಪ್ಪಿಸಿದ್ದನ್ನು ಆತನು ಆ ದಿನಕ್ಕಾಗಿ ಕಾಪಾಡು ವದಕ್ಕೆ ಶಕ್ತನಾಗಿದ್ದಾನೆಂದೂ ದೃಢವಾಗಿ ನಂಬಿದ್ದೇನೆ.
1:13b.2TI.001.013 ನೀನು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯೂ ಪ್ರೀತಿಯೂ ಉಳ್ಳವನಾಗಿ ನನ್ನಿಂದ ಕೇಳಿದ ಸ್ವಸ್ಥ ವಾಕ್ಯಗಳ ಕ್ರಮವನ್ನು ಬಿಗಿಯಾಗಿ ಹಿಡಿದುಕೋ.
1:14b.2TI.001.014 ನಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮನ ಮೂಲಕ ನಿನಗೆ ಒಪ್ಪಿಸಲ್ಪಟ್ಟ ಆ ಒಳ್ಳೇದನ್ನು ನೀನು ಕಾಪಾಡು.
1:15b.2TI.001.015 ಆಸ್ಯ ಸೀಮೆಯಲ್ಲಿರುವವರೆಲ್ಲರೂ ನನ್ನನ್ನು ಬಿಟ್ಟು ಹೋದರೆಂಬದನ್ನು ನೀನು ಬಲ್ಲೆ; ಅವರಲ್ಲಿ ಫುಗೇಲನೂ ಹೆರ್ಮೊಗೇನನೂ ಸೇರಿದ್ದಾರೆ.
1:16b.2TI.001.016 ಒನೇಸಿಫೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ. ಯಾಕಂದರೆ ಅವನು ಅನೇಕಾ ವರ್ತಿ ನನ್ನನ್ನು ಉತ್ತೇಜನ ಪಡಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡಲಿಲ್ಲ.
1:17b.2TI.001.017 ಆದರೆ ಅವನು ರೋಮ್‌ನಲ್ಲಿ ದ್ದಾಗ ಬಹಳ ಶ್ರದ್ಧೆಯಿಂದ ನನ್ನನ್ನು ಹುಡುಕಿ ಕಂಡು ಕೊಂಡನು.ಅವನು ಆ ದಿನದಲ್ಲಿ ಕರ್ತನ ಕರುಣೆ ಯನ್ನು ಕಂಡುಕೊಳ್ಳುವಂತೆ ಕರ್ತನು ಅವನಿಗೆ ದಯ ಪಾಲಿಸಲಿ. ಎಫೆಸದಲ್ಲಿ ನನಗೆ ಎಷ್ಟೋ ಉಪಚಾರ ಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ.
1:18b.2TI.001.018 ಅವನು ಆ ದಿನದಲ್ಲಿ ಕರ್ತನ ಕರುಣೆ ಯನ್ನು ಕಂಡುಕೊಳ್ಳುವಂತೆ ಕರ್ತನು ಅವನಿಗೆ ದಯ ಪಾಲಿಸಲಿ. ಎಫೆಸದಲ್ಲಿ ನನಗೆ ಎಷ್ಟೋ ಉಪಚಾರ ಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ.
2
2:1b.2TI.002.001 ಆದದರಿಂದ ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಲ್ಲಿ ಬಲ ವಾಗಿರು.
2:2b.2TI.002.002 ಅನೇಕ ಸಾಕ್ಷಿಗಳ ಮುಂದೆ ನೀನು ನನ್ನಿಂದ ಕೇಳಿದವುಗಳನ್ನೇ ಇತರರಿಗೆ ಸಹ ಬೋಧಿಸ ಶಕ್ತರಾದ ನಂಬಿಗಸ್ತ ಮನುಷ್ಯರಿಗೆ ಒಪ್ಪಿಸಿಕೊಡು.
2:3b.2TI.002.003 ಆದದರಿಂದ ನೀನು ಯೇಸು ಕ್ರಿಸ್ತನ ಒಳ್ಳೇ ಸೈನಿಕನಂತೆ ಶ್ರಮೆಯನ್ನ ನುಭವಿಸು.
2:4b.2TI.002.004 ಯುದ್ಧಕ್ಕೆ ಹೋಗುವವನು ಈ ಜೀವನದ ವ್ಯವಹಾರಗಳಲ್ಲಿ ಸಿಕ್ಕಿಕೊಳ್ಳದೆ ತನ್ನನ್ನು ಸೈನಿಕನನ್ನಾಗಿ ಆರಿಸಿಕೊಂಡವನನ್ನು ಮೆಚ್ಚಿಸುವದಕ್ಕೆ ಪ್ರಯಾಸಪಡು ತ್ತಾನೆ.
2:5b.2TI.002.005 ಇದಲ್ಲದೆ ಯಾವನಾದರೂ ಪ್ರವೀಣತೆಗಾಗಿ ಹೋರಾಡುವಾಗ ನಿಯಮದ ಪ್ರಕಾರ ಹೋರಾಡ ದಿದ್ದರೆ ಅವನಿಗೆ ಕಿರೀಟ ದೊರೆಯುವದಿಲ್ಲ.
2:6b.2TI.002.006 ಪ್ರಯಾಸ ಪಡುವ ವ್ಯವಸಾಯಗಾರನು ಫಲಗಳಲ್ಲಿ ಮೊದಲನೆಯ ದಾಗಿ ಪಾಲುಗಾರನಾಗಿರತಕ್ಕದ್ದು.
2:7b.2TI.002.007 ನಾನು ಹೇಳುವ ದನ್ನು ಯೋಚಿಸು; ಕರ್ತನು ಎಲ್ಲಾದರಲ್ಲೂ ನಿನಗೆ ವಿವೇಕವನ್ನು ದಯಾಪಾಲಿಸಲಿ.
2:8b.2TI.002.008 ನನ್ನ ಸುವಾರ್ತೆಗನು ಸಾರವಾಗಿ ದಾವೀದನ ವಂಶದವನಾಗಿರುವ ಯೇಸು ಕ್ರಿಸ್ತನು ಸತ್ತವರೊಳಗಿಂದ ಎಬ್ಬಿಸಲ್ಪಟ್ಟವನೆಂದು ಜ್ಞಾಪಕ ಮಾಡಿಕೋ.
2:9b.2TI.002.009 ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಕಟ್ಟಲ್ಪಟ್ಟವನಾ ಗಿದ್ದೇನೆ; ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.
2:10b.2TI.002.010 ಆದ ಕಾರಣ (ದೇವರು) ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯಪ್ರಭಾವ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ತಾಳಿಕೊಳ್ಳುತ್ತೇನೆ.
2:11b.2TI.002.011 ಇದು ನಂಬತಕ್ಕ ದ್ದಾಗಿದೆ, ಏನೆಂದರೆ--ನಾವು ಆತನೊಡನೆ ಸತ್ತಿದ್ದರೆ ಆತನೊಡನೆ ನಾವು ಸಹ ಜೀವಿಸುವೆವು.
2:12b.2TI.002.012 ನಾವು ಬಾಧೆಪಡುವವರಾಗಿದ್ದರೆ ಆತನೊಂದಿಗೆ ನಾವು ಸಹ ಆಳುವೆವು; ಆತನನ್ನು ಅಲ್ಲಗಳೆದರೆ ಆತನು ಸಹ ನಮ್ಮನ್ನು ಅಲ್ಲಗಳೆಯುವನು.
2:13b.2TI.002.013 ನಾವು ಅಪನಂಬಿಕೆ ಯುಳ್ಳವರಾಗಿದ್ದರೂ ಆತನು ನಂಬಿಗಸ್ತನಾಗಿಯೇ ಇರುವನು; ಆತನು ತನ್ನನ್ನು ತಾನು ಅಲ್ಲಗಳೆಯಲಾರನು.
2:14b.2TI.002.014 ಈ ವಿಷಯಗಳನ್ನು ಅವರ ಜ್ಞಾಪಕಕ್ಕೆ ತರಬೇಕು. ಕೇಳುವವರಿಗೆ ಕೇಡನ್ನುಂಟುಮಾಡುವದೇ ಹೊರತು ಯಾವ ಪ್ರಯೋಜನಕ್ಕೂಬಾರದ ವಾಗ್ವಾದಗಳನ್ನು ಮಾಡಬಾರದೆಂದು ಅವರಿಗೆ ಕರ್ತನ ಮುಂದೆ ಖಂಡಿತ ವಾಗಿ ಹೇಳು.
2:15b.2TI.002.015 ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವದಕ್ಕೆ ಅಭ್ಯಾಸಿಸು. ಅವಮಾನಕ್ಕೆ ಗುರಿ ಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ವಿಭಾಗಿಸುವವನೂ ಆಗಿರು.
2:16b.2TI.002.016 ಆದರೆ ಅಶುದ್ಧವಾದ ಹರಟೆಮಾತುಗಳನ್ನು ನಿರಾಕರಿಸು; ಅವುಗಳಿಂದ ಹೆಚ್ಚೆಚ್ಚಾಗಿ ಭಕ್ತಿಹೀನತೆಯು ಉಂಟಾಗುವದು.
2:17b.2TI.002.017 ಅವರ ಮಾತು ವ್ರಣವ್ಯಾಧಿಯಂತೆ ತಿನ್ನುವದು; ಅವರಲ್ಲಿ ಹುಮೆನಾಯನೂ ಪಿಲೇತನೂ ಇದ್ದಾರೆ;
2:18b.2TI.002.018 ಅವರು ಪುನರುತ್ಥಾನವು ಆಗಲೇ ಆಗಿಹೋಯಿ ತೆಂದು ಹೇಳುತ್ತಾ ಸತ್ಯಭ್ರಷ್ಠರಾಗಿ ಕೆಲವರ ನಂಬಿಕೆ ಯನ್ನು ಕೆಡಿಸುವವರಾಗಿದ್ದಾರೆ.
2:19b.2TI.002.019 ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.
2:20b.2TI.002.020 ದೊಡ್ಡ ಮನೆಯಲ್ಲಿ ಬೆಳ್ಳಿ ಬಂಗಾರದ ಪಾತ್ರೆಗಳಲ್ಲದೆ ಮರದ ಪಾತ್ರೆಗಳೂ ಮಣ್ಣಿನ ಪಾತ್ರೆಗಳೂ ಇರುತ್ತವೆ; ಕೆಲವು ಗೌರವಕ್ಕೂ ಕೆಲವು ಅಗೌರವಕ್ಕೂ ಇರುತ್ತವೆ.
2:21b.2TI.002.021 ಒಬ್ಬನು ತನ್ನನ್ನು ಇಂಥವುಗಳಿಂದ ಶುದ್ಧಪಡಿಸಿಕೊಂಡರೆ ಅವನು ಪ್ರತಿಷ್ಠಿತನೂ ಯಜಮಾನನ ಬಳಿಕೆಗೆ ಯೋಗ್ಯನೂ ಸಕಲಸತ್ಕಾರ್ಯಕ್ಕೆ ಸಿದ್ಧನೂ ಆಗಿದ್ದು ಗೌರವಕ್ಕೆ ಪಾತ್ರೆಯಾಗಿರುವನು.
2:22b.2TI.002.022 ಯೌವನದ ಇಚ್ಚೆಗಳಿಂದ ಸಹ ಓಡಿಹೋಗು; ಶುದ್ಧ ಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳು ವವರ ಸಂಗಡ ನೀತಿ ವಿಶ್ವಾಸ ಪ್ರೀತಿ ಸಮಾಧಾನ ಇವುಗಳನ್ನು ಅನುಸರಿಸು.
2:23b.2TI.002.023 ಮೂಢರ ಬುದ್ಧಿಯಿಲ್ಲದ ವಿಚಾರಗಳು ಜಗಳಗಳಿಗೆ ಕಾರಣವಾಗಿವೆ ಎಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ.
2:24b.2TI.002.024 ಕರ್ತನ ಸೇವ ಕನು ಜಗಳವಾಡದೆ ಎಲ್ಲರ ವಿಷಯದಲ್ಲಿ ಸಾಧುವೂ ಬೋಧಿಸುವದರಲ್ಲಿ ಪ್ರವೀಣನೂ ತಾಳ್ಮೆಯುಳ್ಳವನೂ ಆಗಿರಬೇಕು.
2:25b.2TI.002.025 ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನು.ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.
2:26b.2TI.002.026 ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.
3
3:1b.2TI.003.001 ಆದರೆ ಕಡೇ ದಿವಸಗಳಲ್ಲಿ ಅಪಾಯಕರ ವಾದ ಕಾಲಗಳು ಬರುವವೆಂಬದನ್ನು ಸಹ ತಿಳಿದುಕೋ.
3:2b.2TI.003.002 ಮನುಷ್ಯರು ತಮ್ಮನ್ನು ತಾವೇ ಪ್ರೀತಿಸಿ ಕೊಳ್ಳುವವರೂ ಲೋಭಿಗಳೂ ಬಡಾಯಿ ಕೊಚ್ಚುವ ವರೂ ಅಹಂಕಾರಿಗಳೂ ದೇವದೂಷಕರೂ ತಂದೆ ತಾಯಿಗಳಿಗೆ ಅವಿಧೇಯರೂ ಉಪಕಾರನೆನಸದವರೂ ಅಶುದ್ಧರೂ
3:3b.2TI.003.003 ಸ್ವಾಭಾವಿಕವಾದ ಮಮತೆಯಿಲ್ಲದವರೂ ಒಪ್ಪಂದವನ್ನು ಮುರಿಯುವವರೂ ಸುಳ್ಳಾಗಿ ದೂರು ವವರೂ ದಮೆಯಿಲ್ಲದವರೂ ಉಗ್ರತೆಯುಳ್ಳವರೂ ಒಳ್ಳೆಯವರನ್ನೂ ಹೀನೈಸುವವರೂ
3:4b.2TI.003.004 ದ್ರೋಹಿಗಳೂ ದುಡಿಕಿನವರೂ ಉಬ್ಬಿಕೊಂಡವರೂ ದೇವರಿಗಿಂತ ಹೆಚ್ಚಾಗಿ ಭೋಗಗಳನ್ನೇ ಪ್ರೀತಿಸುವವರೂ
3:5b.2TI.003.005 ಭಕ್ತಿಯ ವೇಷವಿದ್ದು ಅದರ ಬಲವನ್ನು ಅಲ್ಲಗಳೆಯುವವರೂ ಆಗಿರುವರು; ಇಂಥವರಿಂದ ಪ್ರತ್ಯೇಕವಾಗಿರು.
3:6b.2TI.003.006 ಮನೆ ಗಳಲ್ಲಿ ನುಸುಳಿ ಪಾಪಗಳಿಂದ ತುಂಬಿದವರೂ ನಾನಾ ವಿಧವಾದ ಇಚ್ಛೆಗಳಿಂದ ನಡಿಸಲ್ಪಟ್ಟವರೂ ಆಗಿರುವ ಅವಿವೇಕಿಗಳಾದ ಸ್ತ್ರೀಯರನ್ನು ವಶಮಾಡಿಕೊಳ್ಳು ವವರೂ ಇವರೊಳಗೆ ಸೇರಿದವರೇ.
3:7b.2TI.003.007 ಇವರು ಯಾವಾಗಲೂ ಕಲಿಯುತ್ತಿದ್ದರೂ ಸತ್ಯದ ಪರಿಜ್ಞಾನ ವನ್ನು ಹೊಂದಲಾರದವರು.
3:8b.2TI.003.008 ಯನ್ನಯಂಬ್ರ ಎಂಬ ವರು ಮೋಶೆಯನ್ನು ವಿರೋಧಿಸಿದಂತೆಯೇ ಇವರು ಸಹ ಸತ್ಯವನ್ನು ವಿರೋಧಿಸುತ್ತಾರೆ; ಇದಲ್ಲದೆ ಇವರು ಬುದ್ಧಿಗೆಟ್ಟವರೂ ಭ್ರಷ್ಟರೂ ಆಗಿದ್ದಾರೆ.
3:9b.2TI.003.009 ಆದರೆ ಇವರು ಇನ್ನು ಮುಂದುವರಿಯಲಾರರು; ಈ ಯನ್ನ ಯಂಬ್ರರ ಮೂರ್ಖತನವು ಎಲ್ಲರಿಗೂ ಪರಿಷ್ಕಾರವಾಗಿ ತಿಳಿದು ಬಂದ ಪ್ರಕಾರ ಇವರದೂ ತಿಳಿದುಬರುವದು.
3:10b.2TI.003.010 ನೀನಾದರೋ ನನ್ನ ಬೋಧನೆ ನಡತೆ ಉದ್ದೇಶ ನಂಬಿಕೆ ದೀರ್ಘ ಶಾಂತಿ ಪ್ರೀತಿ ಸೈರಣೆ ಇವುಗಳನೂ
3:11b.2TI.003.011 ಅಂತಿಯೋಕ್ಯ ಇಕೋನ್ಯ ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ ಕಷ್ಟಾನುಭವಗಳನ್ನೂ ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನೆಂಬ ದನ್ನೂ ನೀನು ಪೂರ್ಣವಾಗಿ ತಿಳಿದವನಾಗಿದ್ದೀ. ಆದರೆ ಅವೆಲ್ಲವುಗಳೊಳಗಿಂದ ಕರ್ತನು ನನ್ನನ್ನು ಬಿಡಿಸಿದನು.
3:12b.2TI.003.012 ಹೌದು, ಕ್ರಿಸ್ತ ಯೇಸುವಿನಲ್ಲಿ ಭಕ್ತಿ ಯುಳ್ಳವರಾಗಿ ಜೀವಿಸುವದಕ್ಕೆ ಮನಸ್ಸು ಮಾಡುವವ ರೆಲ್ಲರೂ ಹಿಂಸೆಗೊಳಗಾಗುವರು.
3:13b.2TI.003.013 ಆದರೆ ದುಷ್ಟರೂ ವಂಚಕರೂ ಮೋಸಮಾಡುತ್ತಾ ತಾವೇ ಮೋಸ ಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.
3:14b.2TI.003.014 ನೀನಾದರೋ ಕಲಿತು ದೃಢವಾಗಿ ನಂಬಿದವುಗಳಲ್ಲಿ ನೆಲೆಯಾಗಿರು. ಕಲಿಸಿಕೊಟ್ಟವರು ಯಾರೆಂಬದನ್ನು ಆಲೋಚಿಸು.
3:15b.2TI.003.015 ಚಿಕ್ಕಂದಿನಿಂದಲೂ ನೀನು ಪರಿಶುದ ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.
3:16b.2TI.003.016 ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
3:17b.2TI.003.017 ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
4
4:1b.2TI.004.001 ಆದದರಿಂದ ದೇವರ ಮುಂದೆಯೂ ಆತನ ಬರೋಣದಲ್ಲಿ ಮತ್ತು ಆತನ ರಾಜ್ಯ ದಲ್ಲಿ ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ--
4:2b.2TI.004.002 ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತ ನಾಗಿರು; ಪೂರ್ಣದೀರ್ಘಶಾಂತಿಯಿಂದಲೂ ಉಪ ದೇಶದಿಂದಲೂ ಖಂಡಿಸು, ಗದರಿಸು, ಎಚ್ಚರಿಸು.
4:3b.2TI.004.003 ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸ ಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಯುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲ ವಾದ ಉಪದೇಶಕರನ್ನು ಇಟ್ಟುಕೊಳ್ಳುವರು.
4:4b.2TI.004.004 ಅವರು ಸತ್ಯಕ್ಕೆ ಕಿವಿಗೊಡದೆ ಕಲ್ಪನಾಕಥೆಗಳನ್ನು ಕೇಳುವದಕ್ಕೆ ತಿರುಗಿಕೊಳ್ಳುವರು.
4:5b.2TI.004.005 ಆದರೆ ನೀನು ಎಲ್ಲಾ ವಿಷಯ ಗಳಲ್ಲಿ ಎಚ್ಚರವಾಗಿರು, ಶ್ರಮೆಗಳನ್ನು ತಾಳಿಕೋ, ಸುವಾರ್ತಿಕನ ಕೆಲಸವನ್ನು ಮಾಡು, ನಿನ್ನ ಸೇವೆಯನ್ನು ಸಂಪೂರ್ಣ ಮಾಡು.
4:6b.2TI.004.006 ನಾನು ಈಗ ಅರ್ಪಿತನಾಗು ವದಕ್ಕೆ ಸಿದ್ಧನಿದ್ದೇನೆ; ನಾನು ಹೊರಟು ಹೋಗಬೇಕಾದ ಸಮಯವು ಸವಿಾಪವಾಗಿದೆ.
4:7b.2TI.004.007 ನಾನು ಒಳ್ಳೇ ಹೋರಾಟವನ್ನು ಹೋರಾಡಿದ್ದೇನೆ, ನಾನು ನನ್ನ ಓಟ ವನ್ನು ಮುಗಿಸಿದ್ದೇನೆ, ನಾನು ನಂಬಿಕೆಯನ್ನು ಕಾಪಾಡಿ ದ್ದೇನೆ.
4:8b.2TI.004.008 ಇನ್ನು ಮುಂದೆ ನನಗೋಸ್ಕರ ನೀತಿಯ ಕಿರೀಟವು ಇಡಲ್ಪಟ್ಟಿದೆ; ಅದನ್ನು ನೀತಿಯುಳ್ಳ ನ್ಯಾಯಾ ಧಿಪತಿಯಾದ ಕರ್ತನು ಆ ದಿನದಲ್ಲಿ ನನಗೆ ಕೊಡು ವನು; ನನಗೆ ಮಾತ್ರವಲ್ಲದೆ ಆತನ ಬರೋಣವನ್ನು ಪ್ರೀತಿಸುವವರೆಲ್ಲರಿಗೆ ಸಹ ಕೊಡುವನು.
4:9b.2TI.004.009 ನನ್ನ ಬಳಿಗೆ ಬೇಗ ಬರುವದಕ್ಕೆ ನೀನು ಪ್ರಯತ್ನ ಮಾಡು;
4:10b.2TI.004.010 ಯಾಕಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು; ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು;
4:11b.2TI.004.011 ಲೂಕನು ಮಾತ್ರ ನನ್ನ ಜೊತೆಯಲ್ಲಿ ದ್ದಾನೆ. ಮಾರ್ಕನನ್ನು ಸಂಗಡ ಕರಕೊಂಡು ಬಾ, ಅವನು ಸೇವೆಗಾಗಿ ನನಗೆ ಉಪಯುಕ್ತನಾಗಿದ್ದಾನೆ.
4:12b.2TI.004.012 ತುಖಿಕನನ್ನು ಎಫೆಸಕ್ಕೆ ಕಳುಹಿಸಿದೆನು.
4:13b.2TI.004.013 ತ್ರೋವ ದಲ್ಲಿ ನಾನು ಕರ್ಪನ ಬಳಿಯಲ್ಲಿ ಬಿಟ್ಟುಬಂದ ಮೇಲಂಗಿ ಯನ್ನೂ ಪುಸ್ತಕಗಳನ್ನೂ ಮುಖ್ಯವಾಗಿ ಚರ್ಮದ ಕಾಗದ ಗಳನ್ನೂ ನೀನು ಬರುವಾಗ ತೆಗೆದುಕೊಂಡು ಬಾ.
4:14b.2TI.004.014 ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು; ಕರ್ತನು ಅವನ ಕೃತ್ಯಗಳಿಗೆ ಸರಿ ಯಾಗಿ ಅವನಿಗೆ ಪ್ರತಿಫಲವನ್ನು ಕೊಡುವನು.
4:15b.2TI.004.015 ನೀನು ಸಹ ಅವನ ವಿಷಯದಲ್ಲಿ ಎಚ್ಚರಿಕೆಯಾಗಿರು; ಯಾಕಂದರೆ ಅವನು ನಮ್ಮ ಮಾತುಗಳನ್ನು ಬಹಳ ವಾಗಿ ಎದುರಿಸಿದನು.
4:16b.2TI.004.016 ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನೊಂದಿಗೆ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ತೊರೆದುಬಿಟ್ಟರು; ಇದು ಅವರ ಲೆಕ್ಕಕ್ಕೆ ಸೇರಿಸಲ್ಪಡದೆ ಇರಲಿ ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ.
4:17b.2TI.004.017 ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.
4:18b.2TI.004.018 ನನ್ನನ್ನು ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ತಪ್ಪಿಸಿ ತನ್ನ ಪರಲೋಕರಾಜ್ಯಕ್ಕೆ ನನ್ನನ್ನು ಕಾಪಾಡು ವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ. ಆಮೆನ್.
4:19b.2TI.004.019 ಪ್ರಿಸ್ಕಳಿಗೂ ಅಕ್ವಿಲ್ಲನಿಗೂ ಒನೆಸಿಫೊರನ ಮನೆಯ ವರಿಗೂ ವಂದನೆ.
4:20b.2TI.004.020 ಎರಸ್ತನು ಕೊರಿಂಥದಲ್ಲಿ ನಿಂತನು. ಆದರೆ ತ್ರೊಫಿಮನು ಅಸೌಖ್ಯವಾಗಿದ್ದದರಿಂದ ಅವ ನನ್ನು ನಾನು ಮಿಲೇತದಲ್ಲಿ ಬಿಟ್ಟೆನು.
4:21b.2TI.004.021 ಚಳಿಗಾಲಕ್ಕೆ ಮುಂಚೆಯೇ ಬರುವದಕ್ಕೆ ಪ್ರಯತ್ನ ಮಾಡು. ಯುಬೂ ಲನೂ ಪೂದೆಯನೂ ಲೀನನೂ ಕ್ಲೌದ್ಯಳೂ ಎಲ್ಲಾ ಸಹೋದರರೂ ನಿನಗೆ ವಂದನೆ ಹೇಳುತ್ತಾರೆ.ಕರ್ತನಾದ ಯೇಸು ಕ್ರಿಸ್ತನು ನಿನ್ನ ಆತ್ಮದ ಸಂಗಡ ಇರಲಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
4:22b.2TI.004.022 ಕರ್ತನಾದ ಯೇಸು ಕ್ರಿಸ್ತನು ನಿನ್ನ ಆತ್ಮದ ಸಂಗಡ ಇರಲಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- Holder of rights
- Multilingual Bible Corpus
- Citation Suggestion for this Object
- TextGrid Repository (2025). Kannada Collection. 2 Timothy (Kannada). 2 Timothy (Kannada). Multilingual Parallel Bible Corpus. Multilingual Bible Corpus. https://hdl.handle.net/21.11113/0000-0016-A213-B